To view a copy of the CC BY-SA 4.0 license visit
http://creativecommons.org/licenses/by-sa/4.0/
ಆದಿಕಾಂಡ
1ದೇವರು ವಿಶ್ವವನ್ನು ಸೃಷ್ಟಿಸಿದ್ದು
1ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.2ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.3ಅನಂತರ ದೇವರು <<ಬೆಳಕಾಗಲಿ>> ಎಂದು ಆಜ್ಞಾಪಿಸಲು ಬೆಳಕಾಯಿತು.ಸೃಷ್ಟಿಯ ಎರಡನೆಯ ವಿವರಣೆ
4ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು.5ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ <<ಹಗಲು>> ಎಂದೂ, ಕತ್ತಲೆಗೆ <<ಇರುಳು>> ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.6ಬಳಿಕ ದೇವರು <<ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ>> ಅಂದನು.7ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು.8ದೇವರು ಆ ಗುಮ್ಮಟಕ್ಕೆ <<ಆಕಾಶ>> ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.9ಅನಂತರ ದೇವರು, <<ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ>> ಅಂದನು. ಹಾಗೆಯೇ ಆಯಿತು.10ದೇವರು ಒಣನೆಲಕ್ಕೆ <<ಭೂಮಿ>> ಎಂದೂ ಜಲರಾಶಿಗೆ <<ಸಮುದ್ರ>> ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.11ತರುವಾಯ ದೇವರು, <<ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ>> ಎಂದು ಹೇಳಿದನು, ಹಾಗೆಯೇ ಆಯಿತು.12ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು13ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.14ಬಳಿಕ ದೇವರು, <<ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.15ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ>> ಅಂದನು. ಹಾಗೆಯೇ ಆಯಿತು.16ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.17ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ18ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು.19ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು.20ತರುವಾಯ ದೇವರು, <<ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ>> ಎಂದು ಹೇಳಿದನು.21ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.22ಇದಲ್ಲದೆ ದೇವರು, <<ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ>> ಎಂದು ಹೇಳಿ ಆಶೀರ್ವದಿಸಿದನು.23ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.24ಬಳಿಕ ದೇವರು, <<ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ>> ಅಂದನು. ಹಾಗೆಯೇ ಆಯಿತು.25ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.26ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.27ಹೀಗೆ ದೇವರು;<<ಮನುಷ್ಯನನ್ನು ತನ್ನ ಸ್ವರೂಪದಲ್ಲಿ
ಉಂಟುಮಾಡಿದನು.
ದೇವರ ಸ್ವರೂಪದಲ್ಲಿ ಅವನನ್ನು
ಉಂಟುಮಾಡಿದನು.
ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.>>
28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, <<ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ>> ಎಂದು ಅವರಿಗೆ ಹೇಳಿದನು.29ಅಲ್ಲದೆ ದೇವರು, <<ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ30ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ>> ಎಂದು ಹೇಳಿದನು. ಅದು ಹಾಗೆಯೇ ಆಯಿತು.31ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.
21ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.2ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.3ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.4ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.ಏದೆನ್ ಉದ್ಯಾನವನವೂ ಪಾಪೋತ್ಪತ್ತಿಯೂ
5ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.6ಆದರೂ ಭೂಮಿಯಿಂದ ನೀರಿನ ಬುಗ್ಗೆ ಉಕ್ಕಿ ಮೇಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿದವು.7ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.8ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.9ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.10ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು.11ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.12ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ.13ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.14ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.15ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.16ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, <<ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.17ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ>> ಎಂದು ಆಜ್ಞಾಪಿಸಿದನು.18ಅನಂತರ ಯೆಹೋವನಾದ ದೇವರು, <<ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು>> ಅಂದನು.19ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.20ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ.21ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.22ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
23<<ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು,ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ.
ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು>> ಅಂದನು.
24ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.25ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
3ಪಾಪದ ಉತ್ಪತ್ತಿ
1ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, <<ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?>> ಎಂದು ಕೇಳಲು.2ಆ ಸ್ತ್ರೀಯು ಸರ್ಪಕ್ಕೆ, <<ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,3ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, <ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ> ಎಂದು ದೇವರು ಹೇಳಿದ್ದಾನೆ>> ಅಂದಳು.4ಆಗ ಸರ್ಪವು ಸ್ತ್ರೀಗೆ, <<ನೀವು ನಿಶ್ಚಯವಾಗಿ ಸಾಯುವುದಿಲ್ಲ.5ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು>> ಎಂದು ಹೇಳಿತು.6ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.7ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.8ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.9ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, <<ನೀನು ಎಲ್ಲಿದ್ದೀ?>> ಎಂದು ಕೇಳಿದನು.10ಅದಕ್ಕೆ ಅವನು, <<ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು>> ಎಂದನು.11ಅದಕ್ಕಾತನು, <<ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?>> ಎಂದು ಕೇಳಿದನು.12ಅದಕ್ಕೆ ಆ ಮನುಷ್ಯನು, <<ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು>> ಎಂದು ಹೇಳಿದನು.13ಯೆಹೋವನಾದ ದೇವರು ಆ ಸ್ತ್ರೀಗೆ, <<ಇದೇನು ನೀನು ಮಾಡಿದ್ದು?>> ಎಂದು ಕೇಳಲು, ಆ ಸ್ತ್ರೀಯು, <<ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು>> ಎಂದು ಉತ್ತರ ಕೊಟ್ಟಳು.ದೇವರ ದಂಡನೆ
14ಆಗ ಯೆಹೋವನಾದ ದೇವರು ಸರ್ಪಕ್ಕೆ;<<ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
15ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ>> ಎಂದು ಹೇಳಿದನು. 16ಆ ನಂತರ ಆ ಸ್ತ್ರೀಗೆ, <<ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು>> ಎಂದು ಹೇಳಿದನು. 17ಅನಂತರ ಆ ಪುರುಷನಿಗೆ, <<ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
18ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.
19ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ>> ಎಂದು ಹೇಳಿದನು. 20ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.21ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು.ಆದಾಮ ಹವ್ವಳನ್ನು ತೋಟದಿಂದ ಹೊರಹಾಕಿದ್ದು
22ಯೆಹೋವ ದೇವರು <<ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು>> ಎಂದು ಆಜ್ಞಾಪಿಸಿದನು.23ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.24ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
4ಕಾಯಿನನು ಮತ್ತು ಹೇಬೆಲನು
1ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, <<ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ>> ಎಂದು ಹೇಳಿದಳು.2ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು.3ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.4ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು.5ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.6ಆಗ ಯೆಹೋವನು ಕಾಯಿನನಿಗೆ, <<ನೀನು ಕೋಪಗೊಂಡಿದ್ದೇಕೆ?7ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು>> ಎಂದು ಹೇಳಿದನು.8ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.9ಯೆಹೋವನು ಕಾಯಿನನಿಗೆ, <<ನಿನ್ನ ತಮ್ಮನಾದ ಹೇಬೆಲನು ಎಲ್ಲಿ?>> ಎಂದು ಕೇಳಲು ಅವನು, <<ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?>> ಎಂದು ಉತ್ತರ ಕೊಟ್ಟನು.10ಅದಕ್ಕೆ ಯೆಹೋವನು, <<ನೀನು ಏನು ಮಾಡಿದೆ? ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.11ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು.12ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ>> ಎಂದನು.13ಆಗ ಕಾಯಿನನು ಯೆಹೋವನಿಗೆ, <<ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ.14ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು>> ಎಂದು ಹೇಳಿದನು.15ಅದಕ್ಕೆ ಯೆಹೋವನು, <<ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು>> ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.16ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು.ಕಾಯಿನನ ಸಂತಾನದವರು
17ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.18ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು.19ಲೆಮೆಕನು ಆದಾ, ಚಿಲ್ಲಾ ಎಂಬ ಇಬ್ಬರು ಹೆಂಡತಿಯರನ್ನು ಮದುವೆ ಮಾಡಿಕೊಂಡನು.20ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.21ಇವನ ತಮ್ಮನ ಹೆಸರು ಯೂಬಾಲನು; ಇವನು ಕಿನ್ನರಿ ಮತ್ತು ಕೊಳಲುಗಳನ್ನು ನುಡಿಸುವವರ ಮೂಲ ಪುರುಷನು.22ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.23ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು;<<ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ;
ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ.
ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು;
ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.
24ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ,ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ>> ಎಂದನು.
ಸೇತನು ಮತ್ತು ಎನೋಷನು
25ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, <<ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು>> ಎಂದು, ಆ ಮಗುವಿಗೆ <<ಸೇತ್>> ಎಂದು ಹೆಸರಿಟ್ಟಳು.26ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, <<ಎನೋಷ್>> ಎಂದು ಹೆಸರಿಟ್ಟನು. ಜನರು, <<ಯೆಹೋವ>> ಎಂಬ ಹೆಸರನ್ನು ಹೇಳಿಕೊಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.
5ಆದಾಮನ ವಂಶಾವಳಿ
(1 ಪೂರ್ವ. 1:1-4)
1ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.2ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ <<ಮನುಷ್ಯ>> ಎಂದು ಹೆಸರಿಟ್ಟನು.3ಆದಾಮನು ನೂರಮೂವತ್ತು ವರ್ಷದವನಾದಾಗ, ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.4ಸೇತನು ಹುಟ್ಟಿದ ಮೇಲೆ, ಆದಾಮನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರು ವರ್ಷ ಬದುಕಿದನು.5ಆದಾಮನು ಒಟ್ಟು ಒಂಭೈನೂರ ಮೂವತ್ತು ವರ್ಷ ಬದುಕಿ ನಂತರ ಸತ್ತನು.6ಸೇತನು ನೂರ ಐದು ವರ್ಷದವನಾದಾಗ, ಎನೋಷನನ್ನು ಪಡೆದನು.7ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು.8ಸೇತನು ಒಟ್ಟು ಒಂಭೈನೂರ ಹನ್ನೆರಡು ವರ್ಷ ಬದುಕಿ ನಂತರ ಸತ್ತನು.9ಎನೋಷನು ತೊಂಭತ್ತು ವರ್ಷದವನಾದಾಗ, ಕೇನಾನನನ್ನು ಪಡೆದನು.10ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರ್ಷ ಬದುಕಿದನು.11ಎನೋಷನು ಒಟ್ಟು ಒಂಭೈನೂರ ಐದು ವರ್ಷ ಬದುಕಿ ನಂತರ ಸತ್ತನು.12ಕೇನಾನನು ಎಪ್ಪತ್ತು ವರ್ಷದವನಾದಾಗ, ಮಹಲಲೇಲನನ್ನು ಪಡೆದನು.13ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ನಲ್ವತ್ತು ವರ್ಷ ಬದುಕಿದನು.14ಕೇನಾನನು ಒಟ್ಟು ಒಂಭೈನೂರ ಹತ್ತು ವರ್ಷ ಬದುಕಿ ನಂತರ ಸತ್ತನು.15ಮಹಲಲೇಲನು ಅರವತ್ತೈದು ವರ್ಷದವನಾದಾಗ ಯೆರೆದನನ್ನು ಪಡೆದನು.16ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರ್ಷ ಬದುಕಿದನು.17ಮಹಲಲೇಲನು ಒಟ್ಟು ಎಂಟುನೂರ ತೊಂಭತ್ತೈದು ವರ್ಷ ಬದುಕಿ ನಂತರ ಸತ್ತನು.18ಯೆರೆದನು ನೂರ ಅರುವತ್ತೆರಡು ವರ್ಷದವನಾದಾಗ ಹನೋಕನನ್ನು ಪಡೆದನು.19ಹನೋಕನು ಹುಟ್ಟಿದ ಮೇಲೆ ಯೆರೆದನು ಎಂಟುನೂರು ವರ್ಷ ಬದುಕಿದನು.20ಯೆರೆದನು ಒಟ್ಟು ಒಂಭೈನೂರ ಅರುವತ್ತೆರಡು ವರ್ಷ ಬದುಕಿ ನಂತರ ಸತ್ತನು.21ಹನೋಕನು ಅರುವತ್ತೈದು ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು.22ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು.23ಹನೋಕನು ಬದುಕಿದ ಒಟ್ಟು ಕಾಲ ಮುನ್ನೂರ ಅರುವತ್ತೈದು ವರ್ಷಗಳು.24ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.25ಮೆತೂಷೆಲಹನು ನೂರ ಎಂಭತ್ತೇಳು ವರ್ಷದವನಾದಾಗ ಲೆಮೆಕನನ್ನು ಪಡೆದನು.26ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರ್ಷ ಬದುಕಿದನು.27ಮೆತೂಷೆಲಹನು ಒಟ್ಟು ಒಂಭೈನೂರ ಅರುವತ್ತೊಂಭತ್ತು ವರ್ಷ ಬದುಕಿ ನಂತರ ಸತ್ತನು.28ಲೆಮೆಕನು ನೂರ ಎಂಭತ್ತೆರಡು ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು.29ಅವನಿಗೆ <<ನೋಹ>> ಎಂದು ಹೆಸರಿಟ್ಟು, <<ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು>> ಎಂದು ಹೇಳಿದನು.30ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರ್ಷ ಬದುಕಿದನು.31ಲೆಮೆಕನು ಒಟ್ಟು ಏಳುನೂರ ಎಪ್ಪತ್ತೇಳು ವರ್ಷ ಬದುಕಿ ನಂತರ ಸತ್ತನು.32ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.
6ಮನುಷ್ಯರ ಕೆಟ್ಟತನ
1ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು2ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.3ಆಗ ಯೆಹೋವನು, << ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸ ಹೊಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು>> ಅಂದನು.4ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.5ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.6ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು.7ಇದಲ್ಲದೆ ಯೆಹೋವನು, <<ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ>> ಎಂದು ದುಃಖಿಸಿದನು.8ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು.ನೋಹನ ಚರಿತ್ರೆ
9ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.10ನೋಹನು ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.11ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.12ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.13ಆಗ ದೇವರು ನೋಹನಿಗೆ, <<ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.14ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.15ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು.16ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.17ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.18<<ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.19ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.20ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು.21ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು>> ಎಂದು ಹೇಳಿದನು.22ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.
7ಜಲಪ್ರಳಯ
1ಆಗ ಯೆಹೋವನು ನೋಹನಿಗೆ, <<ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.2ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.3ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು.4ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ>> ಎಂದು ಹೇಳಿದನು.5ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ನೋಹನು ಮಾಡಿದನು.6ಭೂಮಿಯ ಮೇಲೆ ಜಲಪ್ರಳಯವುಂಟಾದಾಗ ನೋಹನು ಆರುನೂರು ವರ್ಷದವನಾಗಿದ್ದನು.7ಆಗ ನೋಹನು ಪ್ರಳಯದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಿದನು.8ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಶುದ್ಧ, ಅಶುದ್ಧ, ಪಶು ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ9ಗಂಡು ಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ದೇವರ ಅಪ್ಪಣೆಯಂತೆ ನೋಹನ ನಾವೆಯಲ್ಲಿ ಸೇರಿದವು.10ಆ ಏಳು ದಿನಗಳಾದ ನಂತರ ಜಲಪ್ರಳಯವು ಭೂಮಿ ಮೇಲೆ ಬಂತು.11ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.12ನಲ್ವತ್ತು ದಿನ ಹಗಲಿರುಳು ಭೂಮಿಯ ಮೇಲೆ ಬಿರುಮಳೆ ಸುರಿಯಿತು.13ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.14ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ15ಎರಡೆರಡು ತಮ್ಮ ತಮ್ಮ ಜಾತಿಗನುಸಾರವಾಗಿ ನೋಹನ ಬಳಿಗೆ ಬಂದು ನಾವೆಯಲ್ಲಿ ಸೇರಿದವು.16ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು.17ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು.18ನೀರು ಪ್ರಬಲವಾಗಿ ಭೂಮಿಯ ಮೇಲೆ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು.19ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು.20ನೀರು ಆ ಬೆಟ್ಟಗಳಿಂತಲೂ ಹದಿನೈದು ಮೊಳ ಮೇಲಕ್ಕೆ ಹೆಚ್ಚಲು ಅವುಗಳು ಸಂಪೂರ್ಣ ಮುಚ್ಚಿಹೋದುದರಿಂದ,21ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು.22ಮೂಗಿನಿಂದ ಉಸಿರಾಡುವ ಭೂಜಂತುಗಳೆಲ್ಲವೂ ಸತ್ತವು.23ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.24ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲವಾಗಿ ನಿಂತಿತು.
8ಜಲಪ್ರಳಯದ ಅಂತ್ಯ
1ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.2ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು.3ಹೀಗೆ ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆಯಾಯಿತು.4ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟದಲ್ಲಿ ನಿಂತಿತು.5ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು.6ನಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು.7ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು.8ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು.9ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.10ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು.11ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು.12ಮತ್ತೆ ಏಳು ದಿನದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ಹಿಂತಿರುಗಿ ಬರಲೇ ಇಲ್ಲ.13ಆರುನೂರ ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಆಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು.14ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿ ಒಣಗಿತ್ತು.15ಆಗ ದೇವರು ನೋಹನಿಗೆ,16<<ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ;17ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ>> ಎಂದು ಹೇಳಿದನು.18ನೋಹನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ಹೊರಗೆ ಬಂದನು.19ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು.ನೋಹನು ಯೆಹೋವನನ್ನು ಆರಾಧಿಸಿದ್ದು
20ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.21ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, <<ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.22ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ>> ಎಂದನು.
9ನೋಹನೊಡನೆ ಒಡಂಬಡಿಕೆ
1ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, <<ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.2ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.3ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.4ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.5ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?6ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.7ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ>> ಎಂದು ಹೇಳಿದನು.8ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ,9<<ಕೇಳಿರಿ ನಾನು ನಿಮ್ಮೊಂದಿಗೂ, ನಿಮ್ಮ ತರುವಾಯ ನಿಮ್ಮ ಸಂತತಿಯವರೊಂದಿಗೂ, ಒಡಂಬಡಿಕೆ ಮಾಡಿಕೊಳ್ಳುವೆನು.10ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.11ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ>> ಎಂದು ಹೇಳಿದನು.12ದೇವರು ಪುನಃ ಹೇಳಿದ್ದೇನಂದರೆ, <<ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು.13ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.14ನಾನು ಭೂಲೋಕದ ಮೇಲೆ ಮೇಘಗಳನ್ನು ಕವಿಸುವಾಗ ಆ ಕಾಮನಬಿಲ್ಲು ಮೇಘಗಳಲ್ಲಿ ಕಂಡುಬರುವುದು.15ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ.16ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು>> ಅಂದನು.17ಮತ್ತು ದೇವರು ನೋಹನಿಗೆ, <<ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು>> ಎಂದು ಹೇಳಿದನು.ಶೇಮ್ ಯೆಫೆತರಿಗೆ ಸಿಕ್ಕ ಆಶೀರ್ವಾದ, ಕಾನಾನ್ಯರಿಗೆ ದೊರೆತ ಶಾಪ
18ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.19ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು.20ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ.21ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.22ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯೆಫೆತರಿಗೆ ತಿಳಿಸಿದನು.23ಆಗ ಶೇಮ್ ಮತ್ತು ಯೆಫೆತರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂಭಾಗವಾಗಿ ನಡೆದು ತಂದೆಗೆ ಹೊದಿಸಿ ಅವನ ಬೆತ್ತಲೆತನವನ್ನು ಮುಚ್ಚಿದರು. ಅವರು ಹಿಮ್ಮುಖರಾಗಿದ್ದುದ್ದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ.24ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚೆತ್ತು ಕಿರಿಯ ಮಗನು ಮಾಡಿದ್ದನ್ನು ತಿಳಿದು,25<<ಕಾನಾನನುಶಾಪಗ್ರಸ್ತನಾಗಲಿ.
ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ>> ಎಂದನು.
26ಅವನು ಇನ್ನೂ ನುಡಿದದ್ದೇನೆಂದರೆ,<<ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ;
ಕಾನಾನನು ಅವರಿಗೆ ದಾಸನಾಗಿರಲಿ.
27ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ,ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ,
ಕಾನಾನನು ಅವರಿಗೆ ದಾಸನಾಗಿರಲಿ>> ಎಂದನು.
28ಪ್ರಳಯವಾದ ಮೇಲೆ ನೋಹನು ಮುನ್ನೂರೈವತ್ತು ವರ್ಷ ಬದುಕಿದನು.29ನೋಹನು ಒಂಭೈನೂರ ಐವತ್ತು ವರ್ಷ ಬದುಕಿ ಸತ್ತನು. 10ನೋಹನ ಮಕ್ಕಳ ಸಂತಾನ
(1 ಪೂರ್ವ. 1:5-23)
1ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು.2ಯೆಫೆತನ ಸಂತಾನದವರು ಯಾರೆಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರು.3ಗೋಮೆರನ ಸಂತಾನದವರು - ಅಷ್ಕೆನಸ್, ರೀಫತ್, ತೋಗರ್ಮ ಎಂಬವರು.4ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.5ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.6ಹಾಮನ ಸಂತಾನದವರು ಯಾರೆಂದರೆ - ಕೂಷ್, ಮಿಚ್ರಯಿಮ್, ಪೂತ್, ಕಾನಾನ್ ಎಂಬುವವರು.7ಕೂಷನ ಸಂತಾನದವರು ಯಾರೆಂದರೆ - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬವರು. ರಗ್ಮ ಸಂತಾನದವರು - ಶೆಬಾ, ದೆದಾನ್ ಎಂಬುವವರು.8ಕೂಷನು ನಿಮ್ರೋದನನ್ನು ಪಡೆದನು. ಅವನು ಭೂಮಿಯ ಮೇಲಿನ ಮೊದಲನೆಯ ಪರಾಕ್ರಮಶಾಲಿಯಾಗಿದ್ದನು.9ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ <<ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ>> ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು.10ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.11ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ,12ನಿನೆವೆಗೂ ಕೆಲಹಕ್ಕೂ ಮಧ್ಯದಲ್ಲಿ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ರೆಸೆನ್ ಮಹಾಪಟ್ಟಣವೆಂದು ಪ್ರಸಿದ್ಧವಾಗಿದೆ.13ಮಿಚ್ರಯಿಮ್ಯರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು, ಹುಟ್ಟಿದರು.14ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಫಿಲಿಷ್ಟಿಯರಿಂದ ಹುಟ್ಟಿದರು.15ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.16ಇದಲ್ಲದೆ ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,17ಹಿವ್ವಿಯರು, ಅರ್ಕಿಯರು, ಸೀನಿಯರು ಕಾನಾನನಿಂದ ಹುಟ್ಟಿದರು.18ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು.19ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.20ಕುಲ, ಭಾಷೆ, ದೇಶ, ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.21ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು.22ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು.23ಅರಾಮ್ ಸಂತಾನದವರು - ಊಸ್, ಹೂಲ್, ಗೆತೆರ್, ಮಷ್ ಎಂಬವರು.24ಅರ್ಪಕ್ಷದನಿಂದ ಶೆಲಹನೂ, ಶೆಲಹನಿಂದ ಎಬರನೂ ಹುಟ್ಟಿದನು.25ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್.26ಯೊಕ್ತಾನನ ಸಂತಾನದವರು - ಅಲ್ಮೋದಾದ್, ಶೆಲೆಪ್, ಹಚರ್ಮಾವೆತ್, ಯೆರಹ,27ಹದೋರಾಮ್, ಊಜಾಲ್, ದಿಕ್ಲಾ,28ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಎಂಬವರು.29ಹದೋರಾಮ್, ಊಜಾಲ್, ದಿಕ್ಲಾ, ಓಬಾಲ್, ಅಬೀಮಯೇಲ್, ಶೆಬಾ, ಓಫೀರ್, ಹವೀಲ, ಯೋಬಾಬ್ ಈ ಕುಲಗಳೆಲ್ಲಾ ಯೊಕ್ತಾನನಿಂದ ಹುಟ್ಟಿದವು.30ಇವರ ನಿವಾಸವು ಮೇಶಾ ಸೀಮೆ ಮೊದಲುಗೊಂಡು ಪೂರ್ವ ದಿಕ್ಕಿನಲ್ಲಿರುವ ಸೆಫಾರ್ ಎಂಬ ಬೆಟ್ಟದ ವರೆಗೂ ಇತ್ತು.31ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು.32ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.
11ಬಾಬೆಲ್ ಗೋಪುರ ಮತ್ತು ಭಾಷಾಬೇಧ
1ಆಗ ಭೂಲೋಕದವರೆಲ್ಲರಿಗೂ ಒಂದೇ ಭಾಷೆ; ಒಂದೇ ಮಾತು ಇತ್ತು. ಭಾಷಾಭೇದಗಳೇನೂ ಇರಲಿಲ್ಲ.2ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು.3<<ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,>> ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.4ಅವರು, <<ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.5ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು.6ನೋಡಿದ ಮೇಲೆ ಯೆಹೋವನು, <<ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ.7ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ>> ಎಂದನು.8ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು.9ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.ಶೇಮನ ವಂಶದವರ ಚರಿತ್ರೆ
10ಶೇಮನ ವಂಶವೃಕ್ಷ: ಜಲಪ್ರಳಯವು ಕಳೆದು ಎರಡು ವರ್ಷಗಳಾದ ಮೇಲೆ ಶೇಮನು ನೂರು ವರ್ಷದವನಾಗಿ ಅರ್ಪಕ್ಷದನನ್ನು ಪಡೆದನು.11ಶೇಮನು ಅರ್ಪಕ್ಷದನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರು ವರ್ಷ ಬದುಕಿದನು.12ಅರ್ಪಕ್ಷದನು ಮೂವತ್ತೈದು ವರ್ಷದವನಾಗಿ ಶೆಲಹನನ್ನು ಪಡೆದನು.13ಅರ್ಪಕ್ಷದನು ಶೆಲಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು.14ಶೆಲಹನು ಮೂವತ್ತನಾಲ್ಕು ವರ್ಷದವನಾಗಿ ಎಬರನನ್ನು ಪಡೆದನು.15ಶೆಲಹನು ಎಬರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು.16ಎಬರನು ಮೂವತ್ತನಾಲ್ಕು ವರ್ಷದವನಾಗಿ ಪೆಲೆಗನನ್ನು ಪಡೆದನು.17ಎಬರನು ಪೆಲೆಗನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂವತ್ತು ವರ್ಷ ಬದುಕಿದನು.18ಪೆಲೆಗನು ಮೂವತ್ತು ವರ್ಷದವನಾಗಿ ರೆಗೂವನನ್ನು ಪಡೆದನು.19ಪೆಲೆಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಒಂಭತ್ತು ವರ್ಷ ಬದುಕಿದನು.20ರೆಗೂವನು ಮೂವತ್ತೆರಡು ವರ್ಷದವನಾಗಿ ಸೆರೂಗನನ್ನು ಪಡೆದನು.21ಸೆರೂಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಏಳು ವರ್ಷ ಬದುಕಿದನು.22ಸೆರೂಗನು ಮೂವತ್ತು ವರ್ಷದವನಾಗಿ ನಾಹೋರನನ್ನು ಪಡೆದನು.23ಸೆರೂಗನು ನಾಹೋರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರು ವರ್ಷ ಬದುಕಿದನು.24ನಾಹೋರನು ಇಪ್ಪತ್ತೊಂಭತ್ತು ವರ್ಷದವನಾಗಿ ತೆರಹನನ್ನು ಪಡೆದನು.25ನಾಹೋರ್ ತೆರಹನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನೂರ ಹತ್ತೊಂಬತ್ತು ವರ್ಷ ಬದುಕಿದನು.26ತೆರಹನು ಎಪ್ಪತ್ತು ವರ್ಷದವನಾಗಿ ಅಬ್ರಾಮ, ನಾಹೋರ್, ಹಾರಾನ್ ಎಂಬ ಮಕ್ಕಳನ್ನು ಪಡೆದನು.ತೆರಹನ ವಂಶದವರ ಚರಿತ್ರೆ
27ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು.28ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಮುಂದೆಯೇ ಸತ್ತನು.29ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.30ಸಾರಯಳು ಬಂಜೆಯಾಗಿದುದರಿಂದ ಆಕೆಗೆ ಮಕ್ಕಳಿರಲಿಲ್ಲ.31ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.32ತೆರಹನು ಇನ್ನೂರ ಐದು ವರ್ಷ ಬದುಕಿ ನಂತರ ಹಾರಾನಿನಲ್ಲಿ ಸತ್ತನು.
12ದೇವರು ಅಬ್ರಾಮನನ್ನು ಕರೆದದ್ದು
1ಯೆಹೋವನು ಅಬ್ರಾಮನಿಗೆ, <<ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.2ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.3ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು>> ಎಂದು ಹೇಳಿದನು.4ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.5ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು.6ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.7ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, <<ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು>> ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.8ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ9ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಹೋದನು.ಅಬ್ರಾಮನು ಮತ್ತು ಸಾರಳು ಐಗುಪ್ತ ದೇಶದಲ್ಲಿ
10ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.11ಅವನು ಐಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ, <<ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ;12ಐಗುಪ್ತ ದೇಶದವರು ನಿನ್ನನ್ನು ಕಂಡು, ಈಕೆಯು ಇವನ ಹೆಂಡತಿ ಎಂದು ತಿಳಿದು ನನ್ನನ್ನು ಕೊಂದು ನಿನ್ನನ್ನು ಉಳಿಸಬಹುದು.13ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು>> ಎಂದು ಹೇಳಿದನು.14ಅಬ್ರಾಮನು ಐಗುಪ್ತ ದೇಶಕ್ಕೆ ಬಂದಾಗ ಐಗುಪ್ತರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿ ಎಂದು ಅಂದುಕೊಂಡರು.15ಫರೋಹನ ರಾಜಕುಮಾರರು ಆಕೆಯನ್ನು ನೋಡಿ ಬಂದು, ಅವನ ಮುಂದೆ ಹೊಗಳಲಾಗಿ ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರೆಯಿಸಿ ಆಕೆಯ ನಿಮಿತ್ತ ಅಬ್ರಾಮನಿಗೆ ಉಪಕಾರ ಮಾಡಿದನು.16ಆಗ ಅಬ್ರಾಮನಿಗೆ ಕುರಿ, ಎತ್ತು, ಗಂಡು, ಹೆಣ್ಣು ಕತ್ತೆಗಳು, ದಾಸದಾಸಿಯರು, ಒಂಟೆಗಳು, ದೊರಕಿದವು.17ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು.18ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, <<ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ?19ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು>> ಎಂದು ಹೇಳಿ,20ಫರೋಹನು ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಒಟ್ಟಿಗೆ ಸೇರಿಸಿ ಕಳುಹಿಸಿ ಬಿಟ್ಟರು.
13ಅಬ್ರಾಮನು ಲೋಟನನ್ನು ಅಗಲಿದ್ದು
1ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ, ಲೋಟನನ್ನೂ ಸಂಗಡ ಕರೆದುಕೊಂಡು ಐಗುಪ್ತದೇಶವನ್ನು ಬಿಟ್ಟು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯಕ್ಕೆ ಬಂದನು.2ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು.3ಅವನು ದಕ್ಷಿಣ ದೇಶವನ್ನು ಬಿಟ್ಟು ಮುಂದೆ ಪ್ರಯಾಣ ಮಾಡುತ್ತಾ ಬೇತೇಲಿನವರೆಗೆ ಅಂದರೆ ಬೇತೇಲಿಗೂ ಆಯಿ ಎಂಬ ಊರಿಗೂ4ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು. ಸೈನ್ಯಾಧಿಪತಿ5ಅಬ್ರಾಮನ ಜೊತೆಯಲ್ಲಿದ್ದ ಲೋಟನಿಗೂ ಕುರಿ, ಎತ್ತು, ಕುಟುಂಬಗಳು ಇದ್ದವು.6ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆ ಹೋಯಿತು.7ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು.8ಹೀಗಿರಲು ಅಬ್ರಾಮನು ಲೋಟನಿಗೆ, <<ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.9ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು>> ಎಂದು ಹೇಳಿದನು.10ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.11ಆದುದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆರಿಸಿಕೊಂಡು ಮೂಡಣ ಕಡೆಗೆ ಹೊರಟನು.12ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು.13ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.ಅಬ್ರಾಮನು ಹೆಬ್ರೋನಿಗೆ ಬಂದದ್ದು
14ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, <<ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು.15ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.16ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.17ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು>> ಎಂದು ಹೇಳಿದನು.18ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.
14ಅಬ್ರಾಮನು ಲೋಟನನ್ನು ಸೆರೆಯಿಂದ ಬಿಡಿಸಿದ್ದು
1ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,2ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು.3ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.4ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಅಧೀನರಾಗಿದ್ದು ಹದಿಮೂರನೆಯ ವರ್ಷದಲ್ಲಿ ತಿರುಗಿ ಬಿದ್ದರು.5ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.6ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು, ಅಲ್ಲೇ ಸೋಲಿಸಿ ಮರಳುಗಾಡಿನ ಹತ್ತಿರವಿರುವ ಎಲ್ಪಾರಾನಿನ ವರೆಗೂ ಹಿಂದಟ್ಟಿದನು.7ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.8ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್ ಹಾಗೂ ಚೋಗರೆಂಬ ಬೇಲಗದ ರಾಜರು ಹೊರಟು ಅವರಿಗೆದುರಾಗಿ,9ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.10ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.11ಗೆದ್ದ ಆ ನಾಲ್ಕು ಅರಸರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಸಂಪತ್ತನ್ನೂ ದವಸವನ್ನೂ ತೆಗೆದುಕೊಂಡು ಹೋದರು.12ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.13ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.14ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೂ ಹಿಂದಟ್ಟಿದನು.15ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು.16ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತಿರುಗಿ ಪಡೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ, ಸೆರೆಯಲ್ಲಿದ್ದ ಸ್ತ್ರೀಯರನ್ನೂ, ಉಳಿದಿದ್ದ ಜನರನ್ನು ಕರೆದುಕೊಂಡು ಬಂದನು.ಅಬ್ರಾಮನನ್ನು ಯಾಜಕನಾದ ಮೆಲ್ಕೀಚೆದೆಕನು ಆಶೀರ್ವದಿಸಿದ್ದು
17ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.18 ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.19ಇವನು ಅಬ್ರಾಮನನ್ನು ಆಶೀರ್ವದಿಸಿ, <<ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;20ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ>> ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.21ಸೊದೋಮಿನ ಅರಸನು, ಅಬ್ರಾಮನಿಗೆ, <<ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ>> ಎಂದು ಹೇಳಿದನು.22ಅಬ್ರಾಮನು, ಸೊದೋಮಿನ ಅರಸನಿಗೆ,23<<ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. <ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.>24ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ>> ಎಂದು ಹೇಳಿದನು.
15ದೇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು
1ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, <<ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.>>2ಅದಕ್ಕೆ ಅಬ್ರಾಮನು, <<ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?>> ಎಂದನು.3ಪುನಃ ಅಬ್ರಾಮನು ಹೇಳಿದ್ದೇನೆಂದರೆ, <<ನೀನು ನನಗೆ ಸಂತಾನ ಕೊಡಲಿಲ್ಲವಾದ್ದರಿಂದ, ನೋಡು, ನನ್ನ ಮನೆಯಲ್ಲಿ ಹುಟ್ಟಿದವನೇ ನನಗೆ ಬಾಧ್ಯಸ್ಥನಾಗಬೇಕಾಯಿತು>> ಎಂದು ಹೇಳಿದನು.4ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, <<ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು>> ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು,5<<ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.>> ನಂತರ ಯೆಹೋವನು ಅಬ್ರಾಮನಿಗೆ, <<ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು>> ಎಂದು ಹೇಳಿದನು.6ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಪರಿಗಣಿಸಿದನು.7ನಂತರ ಆತನು ಅಬ್ರಾಮನಿಗೆ, <<ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ>> ಎಂದು ಹೇಳಿದನು.8<<ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?>> ಎಂದು ಕೇಳಿದನು.9ಅದಕ್ಕೆ ಆತನು ಯೆಹೋವನಿಗೆ, <<ನೀನು ಮೂರು ವರ್ಷದ ಮಣಕ, ಒಂದು ಆಡು, ಒಂದು ಟಗರು, ಒಂದು ಬೆಳವಕ್ಕಿ, ಒಂದು ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ>> ಎಂದನು.10ಅವನು ಇವುಗಳನ್ನೆಲ್ಲಾ ತೆಗೆದುಕೊಂಡು ಬಂದು ಮೃಗಗಳನ್ನು ಎರಡಾಗಿ ಸೀಳಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಪಕ್ಷಿಗಳನ್ನು ಮಾತ್ರ ಸೀಳಲಿಲ್ಲ.11ಆ ಪಶುಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.12ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು.13ಆಗ ಯೆಹೋವನು ಅಬ್ರಾಮನಿಗೆ, <<ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.14ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.15ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.16ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ>> ಎಂದು ಹೇಳಿದನು.17ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.18ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, <<ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.19ಕೇನಿಯರೂ, ಕೆನಿಜೀಯರೂ, ಕದ್ಮೋನಿಯರೂ,20ಹಿತ್ತಿಯರೂ, ಪೆರಿಜೀಯರೂ, ರೆಫಾಯರೂ,21ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,>> ಎಂದು ವಾಗ್ದಾನ ಮಾಡಿದನು.
16ಇಷ್ಮಾಯೇಲನ ಜನನ
1ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.2ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, <<ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು>> ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.3ಅಬ್ರಾಮನು ಹತ್ತು ವರ್ಷಗಳ ಕಾಲ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.4ಅವನು ಹಾಗರಳನ್ನು ಸಂಗಮಿಸಲು ಆಕೆಯು ಬಸುರಾದಳು. ತಾನು ಬಸುರಾದೆನೆಂದು ತಿಳಿದುಕೊಂಡಾಗ ಅವಳು ತನ್ನ ಯಜಮಾನಿಯನ್ನು ತಾತ್ಸಾರ ಮಾಡತೊಡಗಿದಳು.5ಆಗ ಸಾರಯಳು ಅಬ್ರಾಮನಿಗೆ, <<ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ>> ಎಂದು ಹೇಳಿದಳು.6ಆಗ ಅಬ್ರಾಮನು, <<ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು>> ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು.7ಅವಳು ಮರಳುಗಾಡಿನಲ್ಲಿ ಶೂರಿನ ಮಾರ್ಗದ ನೀರಿನ ಬುಗ್ಗೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು,8<<ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?>> ಎಂದು ಕೇಳಲು ಅವಳು, <<ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ>> ಎಂದಳು.9ಅದಕ್ಕೆ ಯೆಹೋವನ ದೂತನು, <<ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ>> ಎಂದನು.10ಅದಲ್ಲದೆ ಯೆಹೋವನ ದೂತನು ಅವಳಿಗೆ, <<ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು>> ಎಂದು ಹೇಳಿದನು.11ಯೆಹೋವನ ದೂತನು ಅವಳಿಗೆ, <<ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.12ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ ಎದುರಾಗಿ ವಾಸವಾಗಿರುವನು>> ಎಂದು ಹೇಳಿ ಹೋದನು.13ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, <<ನೀನು ನನ್ನನ್ನು ನೋಡುವ ದೇವರು>> ಎಂದು ಹೆಸರಿಟ್ಟಳು: ಏಕೆಂದರೆ, << ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ>> ಎಂದುಕೊಂಡಳು.14ಈ ಸಂಗತಿಯಿಂದ ಅಲ್ಲಿರುವ ಬಾವಿಗೆ << ಬೆರ್ ಲಹೈರೋಯಿ>> ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.15ಹಾಗರಳು ಅಬ್ರಾಮನಿಂದ ಒಬ್ಬ ಮಗನನ್ನು ಹೆತ್ತಳು. ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು.16ಹಾಗರಳು ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರ್ಷದವನಾಗಿದ್ದನು.
17ಸುನ್ನತಿಯು ಒಡಂಬಡಿಕೆಯ ಸಂಕೇತ
1ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, <<ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.2ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ನಿನಗೆ ಕೊಡುವೆನು>> ಎಂದನು.3ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,4<<ನಾನು ನಿನ್ನೊಂದಿಗೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅದೇನೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ,5ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು.6ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು.7ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.8ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು>> ಎಂದನು.9ಇದಲ್ಲದೆ ದೇವರು ಅಬ್ರಹಾಮನಿಗೆ, <<ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.10ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ.11ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.12ಮುಂದಿನ ಎಲ್ಲಾ ತಲತಲಾಂತರವಾಗಿ ಬರುವ ನಿಮ್ಮ ಪ್ರತಿಯೊಂದು ಗಂಡು ಮಗುವಿಗೂ, ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರರ ಮಕ್ಕಳಾಗಲಿ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾಗಲಿ;13ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.14ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು>> ಎಂದು ಹೇಳಿದನು.15ಇದಲ್ಲದೆ ದೇವರು ಅಬ್ರಹಾಮನಿಗೆ, <<ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ <ಸಾರಾ> (ರಾಣಿ) ಎಂದು ಕರೆಯಬೇಕು.16ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು>> ಎಂದು ಹೇಳಿದನು.17ಅಬ್ರಹಾಮನು ಅಡ್ಡ ಬಿದ್ದು ನಕ್ಕು, <<ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?>> ಎಂದು ಮನಸ್ಸಿನಲ್ಲಿ ಅಂದುಕೊಂಡನು.18ಅಬ್ರಹಾಮನು ದೇವರಿಗೆ, <<ಇಷ್ಮಾಯೇಲ್ ಇದ್ದಾನಲ್ಲಾ, ಅವನೇ ನಿನ್ನ ದಯೆ ಹೊಂದಿ ಬಾಳಲಿ>> ಎನ್ನಲು,19ದೇವರು, <<ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ <ಇಸಾಕ> ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.20ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು.21ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು>> ಅಂದನು.22ಆ ನಂತರ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಏರಿ ಹೋದನು.23ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.24ಅಬ್ರಹಾಮನಿಗೆ ಸುನ್ನತಿಯಾದಾಗ ಅವನಿಗೆ ತೊಂಭತ್ತೊಂಭತ್ತು ವರ್ಷವಾಗಿತ್ತು.25ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನಿಗೆ ಹದಿಮೂರು ವರ್ಷವಾಗಿತ್ತು.26ಅಬ್ರಹಾಮನಿಗೂ ಅವನ ಮಗನಾದ ಇಷ್ಮಾಯೇಲನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು.27ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನೊಂದಿಗೆ ಸುನ್ನತಿಯಾಯಿತು.
18ಅಬ್ರಹಾಮನಿಗೆ ದೇವರು ಕೊಟ್ಟ ವಾಗ್ದಾನ
1ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.2ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ,3<<ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.4ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.5ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು>> ಎನ್ನಲು ಅವರು, <<ನೀನು ಹೇಳಿದಂತೆ ಮಾಡಬಹುದು>> ಅಂದರು.6ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, <<ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು>> ಎಂದು ಹೇಳಿದನು.7ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು.8ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.9ಬಳಿಕ ಅವರು ಅವನಿಗೆ, <<ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ>> ಎಂದು ಕೇಳಲು ಅವನು <<ಅಗೋ, ಗುಡಾರದಲ್ಲಿದ್ದಾಳೆ>> ಎಂದನು.10ಅದಕ್ಕೆ ಆತನು, <<ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು>> ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.11ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು.12ಹೀಗಿರಲಾಗಿ ಸಾರಳು, <<ನನ್ನಂಥ ಮುದುಕಿಗೆ ಭೋಗವಾದೀತೇ?>> ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.13ಯೆಹೋವನು ಅಬ್ರಹಾಮನಿಗೆ, <<ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು?14ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು>> ಎಂದು ಹೇಳಿದನು.15ಆಗ ಸಾರಳು ಭಯಪಟ್ಟು, <<ನಾನು ನಗಲಿಲ್ಲ>> ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, <<ಹಾಗಲ್ಲ, ನೀನು ನಕ್ಕಿದ್ದುಂಟು>> ಎಂದನು.ಸೊದೋಮ್ ಪಟ್ಟಣಕ್ಕಾಗಿ ಅಬ್ರಹಾಮನ ವಿಜ್ಞಾಪನೆ
16ತರುವಾಯ ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು.17ಆಗ ಯೆಹೋವನು ತನ್ನೊಳಗೆ, <<ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ?18ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ;19ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು>> ಅಂದುಕೊಂಡನು.20ಇದಲ್ಲದೆ ಯೆಹೋವನು, <<ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,21ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ>> ಎಂದನು.22ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು.23ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, <<ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?24ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?25ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ>> ಎಂದು ಹೇಳಲು.26ಯೆಹೋವನು, <<ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು>> ಎಂದನು.27ಅದಕ್ಕೆ ಅಬ್ರಹಾಮನು, <<ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;28ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?>> ಎಂದು ಕೇಳಲು ಯೆಹೋವನು, <<ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ>> ಅಂದನು.29ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, <<ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು>> ಎನ್ನಲು ಆತನು, <<ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ>> ಎಂದನು.30ಅಬ್ರಹಾಮನು, <<ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು>> ಎನ್ನಲು ಆತನು, <<ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ>> ಅಂದನು.31ಅವನು, <<ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು>> ಎನ್ನಲು ಆತನು, <<ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ>> ಅಂದನು.32ಅಬ್ರಹಾಮನು, <<ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು>> ಎನ್ನಲು ಆತನು, <<ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.>> ಎಂದನು.33ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.
19ಸೊದೋಮ್ ಗೊಮೋರ ಪಟ್ಟಣಗಳ ನಾಶನ
1ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,2<<ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು>> ಅಂದನು. ಅವರು, <<ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ>> ಎನ್ನಲು3ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.4ಅವರು ಮಲಗುವುದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋಮಿನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಮುತ್ತಿಗೆ ಹಾಕಿ,5ಲೋಟನಿಗೆ, <<ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು>> ಕೂಗಿ ಹೇಳಿದರು.6ಲೋಟನು ಅವರ ಬಳಿಗೆ ಹೊರಕ್ಕೆ ಬಂದು ತನ್ನ ಹಿಂದೆ ಕದಹಾಕಿ,7<<ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ.8ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು>> ಎಂದು ಹೇಳಿದನು.9ಅವರು ದಾರಿ ಬಿಡು ಎಂದು ಹೇಳಿ, <<ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ>> ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.10ಆದರೆ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮ ಕಡೆಗೆ ಎಳೆದುಕೊಂಡು ಮನೆಯೊಳಗೆ ಸೇರಿಸಿ ಕದ ಮುಚ್ಚಿದರು.11ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು.ಲೋಟನನ್ನು ಸೊದೋಮಿನಿಂದ ಹೊರಬಂದದ್ದು
12ಆಗ ಆ ದೂತರು ಲೋಟನಿಗೆ, <<ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.13ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ>> ಎಂದು ಹೇಳಿದರು.14ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, <<ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ>> ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.15ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, <<ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು>> ಎಂದು ಹೇಳಿ ತ್ವರೆಪಡಿಸಿದರು.16ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.17ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, <<ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು>> ಎಂದನು.18ಅದಕ್ಕೆ ಲೋಟನು, <<ಕರ್ತನೇ, ಅದು ನನ್ನಿಂದಾಗದು;19ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.20ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?>> ಎಂದನು.21ಅದಕ್ಕಾತನು, <<ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.22ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ>> ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.23ಲೋಟನು ಚೋಗರ್ ಮುಟ್ಟುವಷ್ಟರಲ್ಲಿ ಸೂರ್ಯನು ಉದಯಿಸಿದನು.24ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ25ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.26ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂತಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು.27ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರುಗಿ ಬಂದು ಸೊದೋಮ್ ಗೊಮೋರಗಳ ಕಡೆಗೂ28ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು.29ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.ಲೋಟನು ಮತ್ತು ಅವನ ಹೆಣ್ಣುಮಕ್ಕಳು
30ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು.31ಹೀಗಿರುವಲ್ಲಿ ಹಿರೀಮಗಳು ತನ್ನ ತಂಗಿಗೆ, <<ನಮ್ಮ ತಂದೆ ಮುದುಕನಷ್ಟೆ; ಸರ್ವಲೋಕದ ಪದ್ಧತಿಯ ಮೇರೆಗೆ ನಮ್ಮನ್ನು ಮದುವೆ ಮಾಡಿಕೊಳ್ಳುವ ಪುರುಷರು ಎಲ್ಲಿಯೂ ಇಲ್ಲ;32ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ>> ಎಂದು ಹೇಳಿದಳು.33ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.34ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, <<ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ>> ಎಂದು ಹೇಳಿದಳು.35ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.36ಹೀಗೆ ಲೋಟನ ಇಬ್ಬರು ಹೆಣ್ಣುಮಕ್ಕಳು ತಂದೆಯಿಂದ ಬಸುರಾದರು.37ಹಿರಿಯವಳು ಗಂಡು ಮಗುವನ್ನು ಹೆತ್ತು ಅದಕ್ಕೆ <<ಮೋವಾಬ್>> (ತಂದೆಯಿಂದ ಹುಟ್ಟಿದವನು) ಎಂದು ಹೆಸರಿಟ್ಟಳು. ಇಂದಿನ ವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲಪುರುಷನು.38ಕಿರಿಯ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ <<ಬೆನಮ್ಮಿ>> (ರಕ್ತ ಸಂಬಂಧಿಕನ ಮಗ) ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷನು.
20ಅಬ್ರಹಾಮನು ಮತ್ತು ಅಬೀಮೆಲೆಕನು
1ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸ ಮಾಡಿ ಕೆಲವು ಕಾಲ ಗೆರಾರಿನಲ್ಲೂ ವಾಸಮಾಡಿದನು.2ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು.3ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, <<ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ>> ಎಂದನು.4ಅಬೀಮೆಲೆಕನು ಆಕೆಯನ್ನು ಸಂಗಮಿಸಿರಲಿಲ್ಲ. ಅವನು, <<ಕರ್ತನೇ, ನೀತಿವಂತರಾದ ಜನರನ್ನೂ ನಾಶಮಾಡುವಿಯಾ?5ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು>> ಎಂದನು.6ಅದಕ್ಕೆ ದೇವರು, <<ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.7ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ>> ಎಂದು ಕನಸಿನಲ್ಲಿ ಹೇಳಿದನು.8ಬೆಳಿಗ್ಗೆ ಅಬೀಮೆಲೆಕನು ತನ್ನ ಸೇವಕರೆಲ್ಲರನ್ನು ಕೂಡಿಸಿ ಈ ಸಂಗತಿಗಳನ್ನೆಲ್ಲಾ ತಿಳಿಸಲು ಅವರು ಬಹಳ ಭಯಪಟ್ಟರು.9ಅಬೀಮೆಲೆಕನು ಅಬ್ರಹಾಮನನ್ನು ಕರೆದು, <<ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ>> ಎಂದು ಹೇಳಿ,10<<ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ>> ಎಂದು ಅಬೀಮೆಲೆಕನು ಅಬ್ರಹಾಮನನ್ನು ಕೇಳಿದನು.11ಅದಕ್ಕೆ ಅಬ್ರಹಾಮನು, <<ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.12ಅದಲ್ಲದೆ ಆಕೆ ನಿಜವಾಗಿ ನನ್ನ ತಂಗಿ, ನನ್ನ ತಂದೆಯ ಮಗಳೇ; ಆದರೆ ನನ್ನ ತಾಯಿಯ ಮಗಳಲ್ಲವಾದುದರಿಂದ ನನಗೆ ಹೆಂಡತಿಯಾದಳು.13ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, <ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು> ಎಂದು ತಿಳಿಸಿದೆನು>> ಎಂದನು.14ಆಗ ಅಬೀಮೆಲೆಕನು ಅಬ್ರಹಾಮನಿಗೆ ಕುರಿದನಗಳನ್ನೂ ದಾಸದಾಸಿಯರನ್ನೂ ಕೊಟ್ಟು, ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿ,15<<ಇಗೋ, ಇದು ನನ್ನ ದೇಶ; ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ನೀನು ವಾಸ ಮಾಡಬಹುದು>> ಎಂದು ಅಬೀಮೆಲೆಕನು ಹೇಳಿದನು.16ಇದಲ್ಲದೆ ಅವನು ಸಾರಳಿಗೆ, <<ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಗಮನಕ್ಕೆ ತೆಗೆದುಕೊಳ್ಳದಂತೆ ಇರಲು ಇದು ಪ್ರಾಯಶ್ಚಿವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು>> ಎಂದು ಹೇಳಿದನು.17ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ, ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.18ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಮೊದಲು ಯೆಹೋವನು ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರನ್ನು ಬಂಜೆಯರನ್ನಾಗಿ ಮಾಡಿದ್ದನು.
21ಇಸಾಕನ ಜನನ
1ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.2ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು.3ಅಬ್ರಹಾಮನು ಸಾರಳಲ್ಲಿ ತನ್ನಿಂದ ಹುಟ್ಟಿದ ಮಗನಿಗೆ <<ಇಸಾಕ>> ಎಂದು ಹೆಸರಿಟ್ಟನು.4ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿದನು.5ಇಸಾಕನು ಹುಟ್ಟಿದಾಗ ಅಬ್ರಹಾಮನು ನೂರು ವರ್ಷದವನಾಗಿದ್ದನು.6ಸಾರಳು, <<ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು.7ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ>> ಎಂದು ಹೇಳಿಕೊಂಡಳು.8ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.ಹಾಗರಳನ್ನು ಮತ್ತು ಇಷ್ಮಾಯೇಲನನ್ನು ಹೊರದೂಡಿದ್ದು
9ಆದರೆ ಐಗುಪ್ತಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು,10ಅಬ್ರಹಾಮನಿಗೆ, <<ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು>> ಎಂದು ಹೇಳಿದಳು.11ಮಗನ ಬಗ್ಗೆ ಆಡಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು.12ಆದರೆ ದೇವರು ಅವನಿಗೆ, <<ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;13ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು>> ಎಂದು ಹೇಳಿದನು.14ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.15ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ,16ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, <<ಮಗುವು ಸಾಯುವುದನ್ನು ನೋಡಲಾರೆನು>> ಎಂದು ಹೇಳಿ ಜೋರಾಗಿ ಅತ್ತಳು.17ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, <<ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು;18ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು>> ಎಂದು ಹೇಳಿದನು.19ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು.20ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.21ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಐಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿಸಿದಳು.ಅಬ್ರಹಾಮನ ಮತ್ತು ಅಬೀಮೆಲೆಕನ ಒಪ್ಪಂದ
22ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, <<ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ.23ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು>> ಎಂದು ಹೇಳಿದನು.24ಅದಕ್ಕೆ ಅಬ್ರಹಾಮನು <<ಹಾಗೆಯೇ>> ಪ್ರಮಾಣಮಾಡುತ್ತೇನೆ ಅಂದನು.25ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು,26ಅಬೀಮೆಲೆಕನು, <<ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ>> ಎಂದನು.27ಆ ನಂತರ ಅಬ್ರಹಾಮನು ಕುರಿದನಗಳನ್ನು ಅಬೀಮೆಲೆಕನಿಗೆ ದಾನ ಮಾಡಿದನು.28ತರುವಾಯ ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು,29ಅಬೀಮೆಲೆಕನು ಅಬ್ರಹಾಮನಿಗೆ <<ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?>> ಎಂದು ಕೇಳಿದನು.30ಅದಕ್ಕೆ ಅಬ್ರಹಾಮನು, <<ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು>> ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು.31ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು.32ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಧಿಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿ ಹೊರಟು ಹೋದರು.33ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.34ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹಳ ದಿನಗಳ ಕಾಲ ವಾಸವಾಗಿದ್ದನು.
22ಅಬ್ರಹಾಮನನ್ನು ದೇವರು ಪರೀಕ್ಷಿಸಿದ್ದು
1ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.2ಹೇಗೆಂದರೆ ಆತನು ಅವನನ್ನು, <<ಅಬ್ರಹಾಮನೇ>> ಎಂದು ಕರೆಯಲು ಅವನು, <<ಇಗೋ, ಇದ್ದೇನೆ>> ಎಂದನು. ಆಗ ಆತನು, <<ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು>> ಎಂದನು.3ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.4ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು ಅವನು ತನ್ನ ಸೇವಕರಿಗೆ,5<<ನೀವು ಇಲ್ಲೇ ಕತ್ತೆಯ ಬಳಿಯಲ್ಲಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ಬರುತ್ತೇವೆ>> ಎಂದು ಅಬ್ರಹಾಮನು ಹೇಳಿದನು.6ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು.7ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, <<ಅಪ್ಪಾ>> ಎಂದು ಕರೆಯಲು ಅಬ್ರಹಾಮನು, <<ಏನು ಮಗನೇ>> ಎಂದನು. ಇಸಾಕನು, <<ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ>> ಎಂದು ಕೇಳಿದ್ದಕ್ಕೆ,8ಅಬ್ರಹಾಮನು, <<ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು>> ಎಂದನು.9ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.10ಅಬ್ರಹಾಮನು ತನ್ನ ಮಗನನ್ನು ಕೊಲ್ಲುವುದಕ್ಕೆ, ಕೈಚಾಚಿ ಕತ್ತಿಯನ್ನು ತೆಗೆದುಕೊಂಡನು.11ಆಗ ಯೆಹೋವನ ದೂತನು ಆಕಾಶದೊಳಗಿನಿಂದ, <<ಅಬ್ರಹಾಮನೇ, ಅಬ್ರಹಾಮನೇ>> ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, <<ಇಗೋ, ಇದ್ದೇನೆ>> ಎಂದನು.12ಆ ದೂತನು ಅವನಿಗೆ, <<ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು>> ಎಂದು ಹೇಳಿದನು.13ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.14ಆ ಸ್ಥಳಕ್ಕೆ ಅಬ್ರಹಾಮನು <<ಯೆಹೋವ ಯೀರೆ>> ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.15ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ,16<<ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ17ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.18ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.>> ಎಂದನು.19ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು.ನಾಹೋರನ ಮಕ್ಕಳು
20ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಲ್ಲಿ ಮಕ್ಕಳು ಹುಟ್ಟಿದ್ದಾರೆ ಎಂಬ ವರ್ತಮಾನವನ್ನು ಕೇಳಿದನು.21ಅವರು ಯಾರೆಂದರೆ: ಅವನ ಚೊಚ್ಚಲಮಗನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲನು.22ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂವೇಲ್ ಎಂಬವರೇ.23ಬೆತೂವೇಲನು ರೆಬೆಕ್ಕಳನ್ನು ಪಡೆದನು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಂದ ಪಡೆದಳು.24ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬುವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು.
23ಸಾರಳ ಮರಣ ಮತ್ತು ಸಮಾಧಿ
1ಸಾರಳು ನೂರಿಪ್ಪತ್ತೇಳು ವರ್ಷ ಬದುಕಿದಳು. ಇದು ಅವಳ ಒಟ್ಟು ಜೀವಮಾನ ಕಾಲದ ವರ್ಷಗಳು.2ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.3ಆಮೇಲೆ ಆಕೆಯ ಶವದ ಬಳಿಯಿಂದ ಅಬ್ರಹಾಮನು ಎದ್ದು ಹಿತ್ತಿಯರ ಬಳಿಗೆ ಹೋಗಿ ಅವರಿಗೆ,4<<ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ>> ಎಂದು ಕೇಳಿಕೊಂಡನು.5ಹಿತ್ತಿಯರು ಅಬ್ರಹಾಮನಿಗೆ,6<<ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ>> ಎಂದು ಉತ್ತರ ಕೊಡಲು7ಅಬ್ರಹಾಮನು ಎದ್ದು, ಹಿತ್ತಿಯರಾಗಿದ್ದ ಆ ದೇಶದವರಿಗೆ ತಲೆಬಾಗಿ ನಮಸ್ಕರಿಸಿದನು.8ಅವನು ಅವರ ಸಂಗಡ ಪುನಃ ಮಾತನಾಡಿ, <<ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ,9ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ>> ಎಂದನು.10ಎಫ್ರೋನನು ಅಲ್ಲಿ ಹಿತ್ತಿಯರ ನಡುವೆ ಕುಳಿತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ,11<<ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು>>12ಎಂದು ಹೇಳಲು ಅಬ್ರಹಾಮನು ಆ ದೇಶದ ಜನರಿಗೆ ನಮಸ್ಕರಿಸಿ ಅವರೆಲ್ಲರ ಮುಂದೆ13ಎಫ್ರೋನನಿಗೆ, <<ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು>> ಎಂದು ಹೇಳಿದನು.14ಅದಕ್ಕೆ ಎಫ್ರೋನನು ಅಬ್ರಹಾಮನಿಗೆ,15<<ಸ್ವಾಮಿ, ನನ್ನ ಮಾತನ್ನು ಲಾಲಿಸು; ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು>> ಎಂದನು.16ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.17ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂಮಿಯು, ಅದಕ್ಕೆ ಸೇರಿದ ಗವಿಯು ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳ ಸಹಿತವಾಗಿ,18ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು.19ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂಮಿಯಲ್ಲಿರುವ ಗವಿಯೊಳಗೆ ಹೂಣಿಟ್ಟನು.20ಹಿತ್ತಿಯರು ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಸ್ಮಶಾನ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು.
24ಇಸಾಕನು ರೆಬೆಕ್ಕಳನ್ನು ಮದುವೆಯಾದ್ದದು
1ಅಬ್ರಹಾಮನು ದಿನ ತುಂಬಿದ ವೃದ್ಧನಾಗಿದ್ದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು.2ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, << ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.3ಅನಂತರ ಯೆಹೋವನ ಆಣೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡದೆ,4ನನ್ನ ದೇಶದ, ನನ್ನ ಸಂಬಂಧಿಕರೊಳಗಿಂದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡುತ್ತೇನೆ ಎಂದು ಪರಲೋಕದ ಮತ್ತು ಭೂಲೋಕದ ತಂದೆಯಾಗಿರುವ ಯೆಹೋವನ ಮೇಲೆ ಪ್ರಮಾಣ ಮಾಡಬೇಕು>> ಎಂದು ಹೇಳಿದನು.5ಅದಕ್ಕೆ ಆ ಸೇವಕನು, <<ಒಂದು ವೇಳೆ ನನ್ನೊಡನೆ ಈ ದೇಶಕ್ಕೆ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟು ಬಂದ ಆ ದೇಶಕ್ಕೆ ನಾನು ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?>> ಎಂದು ಕೇಳಿದನು.6ಅಬ್ರಹಾಮನು ಅವನಿಗೆ, <<ಅಲ್ಲಿಗೆ ನನ್ನ ಮಗನನ್ನು ಎಂದಿಗೂ ಕರೆದುಕೊಂಡು ಹೋಗಲೇ ಬಾರದು.7ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು, <ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು> ಎಂದು ಪ್ರಮಾಣಮಾಡಿ ಹೇಳಿದ ಪರಲೋಕದ ದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಂಡು ಬರುವಂತೆ ಅನುಕೂಲಮಾಡುವನು.8ನಿನ್ನನ್ನು ಹಿಂಬಾಲಿಸಿ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ಆದರೆ ನನ್ನ ಮಗನನ್ನು ತಿರುಗಿ ಅಲ್ಲಿಗೆ ಕರೆದುಕೊಂಡು ಹೋಗಬಾರದು>> ಎಂದು ಹೇಳಿದನು.9ಆಗ ಆ ಸೇವಕನು ತನ್ನ ದಣಿಯಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಅವನು ಹೇಳಿದಂತೆಯೇ ಪ್ರಮಾಣಮಾಡಿದನು.10ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.11ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ,12<<ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.13ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.14ನಾನು ಯಾವ ಹುಡುಗಿಗೆ, <ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು> ಎಂದು ಹೇಳುವಾಗ, <ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ> ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು>> ಎಂದನು.15ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.16ಆ ಹುಡುಗಿ ಬಹು ಸುಂದರಿಯೂ ಇನ್ನೂ ಮದುವೆಯಾಗದ ಕನ್ಯೆಯಾಗಿದ್ದಳು.17ಆಕೆ ಬುಗ್ಗೆಯ ಬಳಿಗೆ ಹೋಗಿ ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಬಂದಾಗ ಆ ಸೇವಕನು ಓಡಿಬಂದು ಎದುರುಗೊಂಡು, <<ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು>> ಎಂದು ಕೇಳಿಕೊಳ್ಳಲು ಆಕೆಯು,18ಆಕೆ ತಕ್ಷಣವೇ ಕೊಡವನ್ನು ತನ್ನ ಕೈಯ ಮೇಲೆ ಇಳಿಸಿ <<ಕುಡಿಯಿರಿ>> ಎಂದು ಕುಡಿಯಲು ಕೊಟ್ಟಳು.19ನೀರು ಕೊಟ್ಟ ಮೇಲೆ, <<ನಾನು ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರು ತಂದು ಕೊಡುತ್ತೇನೆ>> ಎಂದು ಹೇಳಿ,20ಕೊಡದಲ್ಲಿದ್ದ ನೀರನ್ನು ನೀರಿನ ತೊಟ್ಟಿಯೊಳಗೆ ಹೊಯ್ಯಿದು ತಿರುಗಿ ತರುವುದಕ್ಕೆ ಬಾವಿಗೆ ತ್ವರೆಯಾಗಿ ಹೋದಳು. ಹೀಗೆ ಅವನ ಎಲ್ಲಾ ಒಂಟೆಗಳಿಗೂ ನೀರನ್ನು ತಂದು ಕೊಟ್ಟಳು.21ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು.22ಒಂಟೆಗಳು ಕುಡಿದ ನಂತರ ಅವನು ಆಕೆಗೆ ಅರ್ಧ ತೊಲಾ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನು, ಆಕೆಯ ಕೈಗಳಿಗೆ ಹತ್ತು ತೊಲಾ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಕೊಟ್ಟು, <<ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.23ನಿನ್ನ ತಂದೆಯ ಮನೆಯಲ್ಲಿ ನಾವು ಇಳಿದು ಕೊಳ್ಳುವುದಕ್ಕೆ ಸ್ಥಳವಿದೆಯೋ?>> ಎಂದು ಕೇಳಲು,24ಆಕೆಯು ಅವನಿಗೆ, <<ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು>> ಎಂದು ಉತ್ತರಕೊಟ್ಟಳು.25ಇದಲ್ಲದೆ ಆಕೆಯು ಅವನಿಗೆ, <<ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇದೆ ಮತ್ತು ನೀನು ಉಳಿದುಕೊಳ್ಳುವುದಕ್ಕೂ ಸ್ಥಳವಿದೆ>> ಎಂದಳು.26ಆ ಮನುಷ್ಯನು ಇದನ್ನು ಕೇಳಿ ಅಡ್ಡಬಿದ್ದು ಯೆಹೋವನಿಗೆ ನಮಸ್ಕರಿಸಿ,27<<ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೆಟ್ಟನೆ ದಾರಿಯಿಂದಲೇ ಕರೆದುಕೊಂಡು ಬಂದಿದ್ದಾನೆ>> ಎಂದನು.28ಆ ಹುಡುಗಿಯು ಓಡಿ ಹೋಗಿ ನಡೆದ ಸಂಗತಿಯನ್ನು ತಾಯಿಯ ಮನೆಯವರಿಗೆ ತಿಳಿಸಿದಳು.29ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು. ಅವನು ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.30ತನ್ನ ತಂಗಿಯ ಬಳಿ ಇದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿ, ಆ ಮನುಷ್ಯನು ನನ್ನ ಸಂಗಡ ಹೇಗೆ ಮಾತನಾಡಿದನೆಂದು ರೆಬೆಕ್ಕಳು ಹೇಳಿದ ಮಾತುಗಳನ್ನು ಕೇಳಿ, ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಬಂದನು.31ಅವನಿಗೆ, <<ಯೆಹೋವನ ಆಶೀರ್ವಾದವನ್ನು ಹೊಂದಿದವನೇ, ಒಳಗೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯಲ್ಲಿ ಒಂಟೆಗಳಿಗೆ ಬೇಕಾದ ಸ್ಥಳವನ್ನೂ ಸಿದ್ಧಮಾಡಿದ್ದೇನೆ>> ಎಂದು ಹೇಳಿದನು.32ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನು, ಮೇವನ್ನು ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡ ಇದ್ದವರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಟ್ಟನು.33ಆದರೆ ಅವನಿಗೆ ಊಟಕ್ಕೆ ಬಡಿಸಿದಾಗ, ಅವನು, <<ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವುದಿಲ್ಲ>> ಅನ್ನಲು ಲಾಬಾನನು, <<ಹೇಳು>> ಎಂದನು.34ಆಗ ಅವನು, <<ನಾನು ಅಬ್ರಹಾಮನ ಸೇವಕನು.35ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ, ಬೆಳ್ಳಿ ಬಂಗಾರವನ್ನೂ, ದಾಸದಾಸಿಯರನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಟ್ಟಿದ್ದರಿಂದ ಅವನು ಧನವಂತನಾದನು.36ನನ್ನ ದಣಿಯ ಪತ್ನಿಯಾದ ಸಾರಳು ವೃದ್ಧಾಪ್ಯದಲ್ಲಿ ಅವನಿಗೆ ಮಗನನ್ನು ಹೆತ್ತಳು; ಆ ಮಗನಿಗೆ ನನ್ನ ದಣಿಯು ತನಗಿರುವುದನ್ನೆಲ್ಲಾ ಕೊಟ್ಟಿದ್ದಾನೆ.37ಇದಲ್ಲದೆ ನನ್ನ ದಣಿಯು ನನ್ನಿಂದ ಪ್ರಮಾಣ ಮಾಡಿಸಿ, <ನಾನು ವಾಸವಾಗಿರುವ ಕಾನಾನ್ ದೇಶದವರಿಂದ ನನ್ನ38ಮಗನಿಗೆ ಹೆಣ್ಣನ್ನು ತೆಗೆದುಕೊಳ್ಳದೆ, ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ಹೆಣ್ಣನ್ನು ತೆಗೆದುಕೊಳ್ಳಬೇಕೆಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿದನು.>39ನಾನು ನನ್ನ ದಣಿಗೆ, <ಒಂದು ವೇಳೆ ನನ್ನ ಹಿಂದೆ ಬರುವುದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ> >> ಎಂದು ಹೇಳಲು,40ಅವನು ನನಗೆ, <<ನಾನು ಆರಾಧನೆ ಮಾಡುತ್ತಾ ಬಂದಿರುವ ನನ್ನ ದೇವರಾದ ಆ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲ ಮಾಡುವನು.41ಆ ಮೇಲೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಹೋದಾಗ ನನ್ನ ಬಂಧುಗಳಲ್ಲಿ ಅವರು ಹೆಣ್ಣನ್ನು ಕೊಡದಿದ್ದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ>> ಎಂದು ಹೇಳಿದನು.42ನಾನು ಈ ಹೊತ್ತು ಈ ಊರಿನ ಬುಗ್ಗೆಯ ಬಳಿಗೆ ಬಂದಾಗ, <<ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡುವುದಾದರೆ43ನೀರಿಗೆ ಬರುವ ಯಾವ ಸ್ತ್ರೀಗೆ, <ನೀನು ದಯವಿಟ್ಟು, ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡಮ್ಮಾ> ಎಂದು ನಾನು ಕೇಳುವಾಗ, ಅವಳು,44<ಕುಡಿಯಿರಿ ಮತ್ತು ನಿನ್ನ ಒಂಟೆಗಳಿಗೂ ನೀರು ತಂದು ಕೊಡುತ್ತೇನೆ ಅನ್ನುವಳೋ ಅವಳೇ ಯೆಹೋವನಿಂದ ನನ್ನ ದಣಿಯ ಮಗನಿಗೆ ನೇಮಕವಾದ ಕನ್ಯೆಯಾಗಿರಲಿ> ಎಂದು,45ನಾನು ನನ್ನ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವಾಗಲೇ, ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆನು. ಆಕೆಯು ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, <ನನಗೆ ಕುಡಿಯುವುದಕ್ಕೆ ನೀರನ್ನು ಕೊಡು> ಎಂದು ಕೇಳಿದೆನು.46ಆ ಕ್ಷಣವೇ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ, <ಕುಡಿಯಿರಿ, ನಿಮ್ಮ ಒಂಟೆಗಳಿಗೂ ತಂದು ಕೊಡುತ್ತೇನೆ> ಎಂದಳು. ನಾನು ಕುಡಿದ ಮೇಲೆ ಆಕೆ ಒಂಟೆಗಳಿಗೂ ನೀರು ತಂದುಕೊಟ್ಟಳು.47ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆಯು, <ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು> ಎಂದಳು.48ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ಸತ್ಯದ ದಾರಿಯಲ್ಲಿ ಕರೆದುಕೊಂಡು ಬಂದುದಕ್ಕಾಗಿ ಆತನನ್ನು ಕೊಂಡಾಡಿದನು.49ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ, ನಂಬಿಕೆಯಿಂದಲೂ ನಡೆಯುವುದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ನನ್ನ ಪ್ರಯಾಣ ಮುಂದುವರೆಸುತ್ತೇನೆ>> ಎಂದು ವಿವರಿಸಿದನು.50ಅದಕ್ಕೆ ಲಾಬಾನನೂ, ಬೆತೂವೇಲನೂ, <<ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು; ನಾವಂತೂ ಹೌದೆಂದೂ, ಅಲ್ಲವೆಂದೂ ಹೇಳಲಾರೆವು. ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ;51ಕರೆದುಕೊಂಡು ಹೋಗಬಹುದು; ಯೆಹೋವನು ಹೇಳಿದಂತೆಯೇ ರೆಬೆಕ್ಕಳು ನಿನ್ನ ದಣಿಯ ಮಗನಿಗೆ ಹೆಂಡತಿಯಾಗಲಿ>> ಎಂದರು.52ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು.53ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು.54ಬಳಿಕ ಅವನೂ ಅವನ ಸಂಗಡ ಬಂದ ಸೇವಕರೂ ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಗ್ಗೆ ಎದ್ದಾಗ ಅವನು, <<ನನ್ನ ದಣಿಯ ಬಳಿಗೆ ಹೊರಡುವುದಕ್ಕೆ ನನಗೆ ಅಪ್ಪಣೆಯಾಗಲಿ>> ಎಂದು ಕೇಳಲು,55ರೆಬೆಕ್ಕಳ ಅಣ್ಣನೂ, ತಾಯಿಯೂ ಅವನಿಗೆ, <<ಹುಡುಗಿಯು ಇನ್ನು ಹತ್ತು ದಿನವಾದರೂ ನಮ್ಮಲ್ಲಿರಲಿ; ಆ ಮೇಲೆ ಆಕೆ ಹೋಗಬಹುದು>> ಎಂದು ಹೇಳಿದರು.56ಅವನು ಅವರಿಗೆ, <<ಯೆಹೋವನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾನೆ; ಆದುದರಿಂದ ನನ್ನನ್ನು ತಡೆಯಬೇಡಿರಿ, ನನ್ನ ದಣಿಯ ಬಳಿಗೆ ಹೋಗುವುದಕ್ಕೆ ನನಗೆ ಅಪ್ಪಣೆಯಾಗಬೇಕು>> ಎಂದು ಹೇಳಲು,57ಅವರು, <<ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯವನ್ನು ತಿಳಿದುಕೊಳ್ಳುತ್ತೇವೆ>> ಎಂದರು.58ಅವರು ರೆಬೆಕ್ಕಳನ್ನು ಕರೆದು ಆಕೆಗೆ, <<ಅಮ್ಮಾ ಈ ಮನುಷ್ಯನ ಜೊತೆಯಲ್ಲಿ ನೀನು ಹೋಗುವಿಯಾ?>> ಎಂದು ಕೇಳಿದರು. ಅದಕ್ಕೆ ಅವಳು <<ಹೋಗುತ್ತೇನೆ>> ಎಂದಳು.59ಆಗ ಅವರು ತಮ್ಮ ತಂಗಿಯಾದ ರೆಬೆಕ್ಕಳನ್ನೂ, ಅವಳ ದಾಸಿಯರನ್ನು, ಸಂಗಡ ಬಂದ ಅಬ್ರಹಾಮನ ಮನುಷ್ಯರ ಸಂಗಡ ಕಳುಹಿಸಿ ಕೊಟ್ಟರು.60ಮತ್ತು ರೆಬೆಕ್ಕಳಿಗೆ,<<ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ;
ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ>> ಎಂದು ಹೇಳಿ ಹರಸಿದರು.
61ರೆಬೆಕ್ಕಳೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿದವರಾಗಿ ಅಬ್ರಹಾಮನ ಸೇವಕನ ಹಿಂದೆ ಹೋದರು. ಹೀಗೆ ಆ ಸೇವಕರು ರೆಬೆಕ್ಕಳನ್ನು ಕರೆದುಕೊಂಡು ಹೊರಟನು.62ಅಷ್ಟರಲ್ಲಿ ಇಸಾಕನು ಬೆರ್ ಲಹೈರೋಯಿ ಬಾವಿಗೆ ಹೋಗಿ ಬಂದಿದ್ದನು; ಅವನು ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು.63ಇಸಾಕನು ಸಂಜೆ ವೇಳೆಯಲ್ಲಿ ಧ್ಯಾನ ಮಾಡುವುದಕ್ಕಾಗಿ ಬಯಲು ಪ್ರದೇಶಕ್ಕೆ ಹೋಗಿದ್ದನು. ಅಲ್ಲಿ ಕಣ್ಣೆತ್ತಿ ನೋಡಲಾಗಿ ಒಂಟೆಗಳು ಬರುವುದನ್ನು ಕಂಡನು.64ರೆಬೆಕ್ಕಳು ಕಣ್ಣೆತ್ತಿ ಇಸಾಕನನ್ನು ನೋಡಿ ಒಂಟೆಯಿಂದ ಕೆಳಗೆ ಇಳಿದಳು.65ಆಕೆಯು ಆ ಸೇವಕನಿಗೆ, <<ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?>> ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು.66ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲಾ ಇಸಾಕನಿಗೆ ತಿಳಿಸಿದ ನಂತರ ಇಸಾಕನು ಆಕೆಯನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು.67ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು.
25ಅಬ್ರಹಾಮನ ಎರಡನೆಯ ಹೆಂಡತಿಯಿಂದಾದ ಸಂತಾನವನ್ನು ಕುರಿತದ್ದು
(1 ಪೂರ್ವ. 1:32-33)
1ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬ ಹೆಂಡತಿಯನ್ನು ಮದುವೆ ಮಾಡಿಕೊಂಡನು.2ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.3ಯೊಕ್ಷಾನನು ಶೆಬಾ, ದೆದಾನ್ ಎಂಬಿವರನ್ನು ಪಡೆದನು. ಅಶ್ಮೂರ್ಯರೂ, ಲೆಟೂಶ್ಯರೂ, ಲೆಯುಮ್ಯರೂ ದೆದಾನನಿಂದ ಹುಟ್ಟಿದವರು.4ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು.5ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು.6ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು.ಅಬ್ರಹಾಮನ ಮರಣ ಮತ್ತು ಸಮಾಧಿ
7ಅಬ್ರಹಾಮನು ನೂರ ಎಪ್ಪತ್ತೈದು ವರ್ಷ ಬದುಕಿದನು.8ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.9ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.10ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.11ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹೈರೋಯಿಯ ಹತ್ತಿರ ವಾಸವಾಗಿದ್ದನು.ಇಷ್ಮಾಯೇಲನ ವಂಶಸ್ಥರನ್ನು ಕುರಿತದ್ದು
12ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ.13ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,14ಮಿಷ್ಮಾ, ದೂಮಾ, ಮಸ್ಸಾ,15ಹದದ್, ತೇಮಾ, ಯಟೂರ್, ನಾಫೀಷ್, ಕೇದ್ಮಾ ಎಂಬುವವರೇ.16ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ.17ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.18ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತ ದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರು ತಮ್ಮ ಸಂಬಂಧಿಕರ ಎದುರಾಗಿ ವಾಸಿಸಿದರು.ಇಸಾಕನಿಗೆ ಅವಳಿ ಮಕ್ಕಳು ಹುಟ್ಟಿದ್ದು
19ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ.20ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.21ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.22ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, <<ಹೀಗಾದರೆ ನಾನು ಹೇಗೆ ಬದುಕಬೇಕು>> ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು.23ಯೆಹೋವನು ಆಕೆಗೆ,<<ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ;
ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು;
ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು;
ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು>> ಎಂದು ಹೇಳಿದನು.
24ಆಕೆ ದಿನತುಂಬಿದಾಗ ಅವಳಿ ಮಕ್ಕಳನ್ನು ಹೆತ್ತಳು.25ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು. ಅದಕ್ಕೆ << ಏಸಾವ>> ಎಂದು ಹೆಸರಿಟ್ಟರು.26ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ <<ಯಾಕೋಬ>> ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು.ಏಸಾವನು ಚೊಚ್ಚಲತನದ ಹಕ್ಕನ್ನು ಮಾರಿಬಿಟ್ಟದ್ದು
27ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.28ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.29ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, <<ನಾನು ಬಹಳ ದಣಿದು ಬಂದಿದ್ದೇನೆ;30ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು>> ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ <<ಎದೋಮ್>> ಎಂದು ಹೆಸರಾಯಿತು.31ಯಾಕೋಬನು ಅವನಿಗೆ, <<ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿ ಬಿಡು>> ಅನ್ನಲು,32ಏಸಾವನು, <<ಆಗಲಿ>> ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು.33ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.34ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು.
26ಇಸಾಕನು ಗೆರಾರಿನಲ್ಲಿ
1ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.2ಅಲ್ಲಿ ಯೆಹೋವನು ಇಸಾಕನಿಗೆ ದರ್ಶನಕೊಟ್ಟು, <<ನೀನು ಐಗುಪ್ತ ದೇಶಕ್ಕೆ ಇಳಿದು ಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.3ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,4ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.5ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು>> ಎಂದನು.ಇಸಾಕನು ಹೆಂಡತಿಯನ್ನು ತಂಗಿಯೆಂದು ಹೇಳಿದ್ದು
6ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.7ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.8ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು.9ಆಗ ಅಬೀಮೆಲೆಕನು ಇಸಾಕನನ್ನು ಕರೆಯಿಸಿ, <<ನಿಶ್ಚಯವಾಗಿ ಈಕೆಯ ನಿನ್ನ ಹೆಂಡತಿಯಲ್ಲವೇ, ತಂಗಿ ಎಂದು ಯಾಕೆ ಹೇಳಿದೆ>> ಎಂದು ಕೇಳಲು ಇಸಾಕನು, <<ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆನು>> ಎಂದನು.10ಅದಕ್ಕೆ ಅಬೀಮೆಲೆಕನು, <<ನೀನು ನಮಗೆ ಹೀಗೆ ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಆಸ್ಪದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?>>11ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, <<ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣ ದಂಡನೆಯಾಗುವುದು>> ಎಂದು ಆಜ್ಞೆ ಮಾಡಿದನು.ಫಿಲಿಷ್ಟಿಯರು ಇಸಾಕನನ್ನು ಹೊರಡಿಸಿದ್ದು
12ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;13ಅವನ ಐಶ್ವರ್ಯವು ದಿನೇ ದಿನೇ ಹೆಚ್ಚಿದ್ದರಿಂದ ಬಹು ಧನವಂತನಾದನು.14ಅವನಿಗೆ ದನಕುರಿಗಳೂ, ಸಂಪತ್ತೂ, ಸೇವಕರು ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.15ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು.16ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, <<ನೀನು ನಮಗಿಂತ ಬಹು ಬಲಿಷ್ಠನಾಗಿದ್ದೀ;17ಆದ್ದರಿಂದ ನಮ್ಮ ಬಳಿಯಿಂದ ಹೊರಟುಹೋಗಬೇಕು>> ಎಂದು ಹೇಳಲು ಇಸಾಕನು ಅಲ್ಲಿಂದ ಹೋಗಿ ಗೆರಾರ್ ತಗ್ಗಿನ ಬಯಲಿನಲ್ಲಿ ಬಿಡಾರ ಮಾಡಿಕೊಂಡು ಅಲ್ಲಿ ವಾಸವಾಗಿದ್ದನು.18ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.19ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಉಕ್ಕುವ ಒರತೆಯ ನೀರಿನ ಬಾವಿಯು ಸಿಕ್ಕಿತು.20ಗೆರಾರಿನ ದನ ಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನ ಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ << ಏಸೆಕ್>> ಎಂದು ಹೆಸರಿಟ್ಟನು.21ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ << ಸಿಟ್ನಾ>> ಎಂದು ಹೆಸರಿಟ್ಟನು.22ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, <<ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು>> ಎಂದು ಹೇಳಿ ಅದಕ್ಕೆ << ರೆಹೋಬೋತ್>> ಎಂದು ಹೆಸರಿಟ್ಟನು.ಇಸಾಕನ ಮತ್ತು ಅಬೀಮೆಲೆಕನ ಒಡಂಬಡಿಕೆ
23ಇಸಾಕನು ಅಲ್ಲಿಂದ ಹೊರಟು ಗಟ್ಟಾ ಹತ್ತಿ ಬೇರ್ಷೆಬಕ್ಕೆ ಬಂದನು.24ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, <<ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು>> ಎಂದು ಹೇಳಿದನು.25ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.26ಅಲ್ಲಿಯೂ ಇಸಾಕನ ಸೇವಕರು ಬಾವಿಯನ್ನು ಅಗೆದರು. ಆ ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜ್ಜತನನ್ನೂ, ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು,27ನೀವು, <<ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿ ಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ>> ಎಂದು ಅವರನ್ನು ಕೇಳಿದ್ದಕ್ಕೆ ಅವರು,28<<ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.29ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ>> ಎಂದು ಹೇಳಿದರು.30ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ಭೋಜನ ಉಪಚಾರಗಳನ್ನು ಮುಗಿಸಿಕೊಂಡರು.31ಅವರು ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. ಇಸಾಕನು ಅವರನ್ನು ಕಳುಹಿಸಲು ಅವರು ಸಮಾಧಾನದಿಂದ ಹೊರಟುಹೋದರು.32ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, <<ನಮಗೆ ನೀರು ಸಿಕ್ಕಿತು>> ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು.33ಅವನು ಆ ಬಾವಿಗೆ << ಷಿಬಾ>> ಎಂದು ಹೆಸರಿಟ್ಟನು. ಆದುದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ <<ಬೇರ್ಷೆಬ>> ಎಂದು ಹೆಸರಾಯಿತು.ಏಸಾವನು ಹಿತ್ತಿಯರಲ್ಲಿ ಹೆಣ್ಣನ್ನು ಮದುವೆಯಾದದ್ದು
34ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆ ಮಾಡಿಕೊಂಡನು.35ಇವರ ದೆಸೆಯಿಂದ ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಉಂಟಾಯಿತು.
27ಯಾಕೋಬನು ಮೋಸದಿಂದ ಆಶೀರ್ವಾದವನ್ನು ಪಡೆದುಕೊಂಡದ್ದು
1ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, <<ಮಗನೇ>> ಎನ್ನಲು ಏಸಾವನು, <<ಇಗೋ ಇದ್ದೇನೆ>> ಅಂದನು.2ಇಸಾಕನು ಅವನಿಗೆ, <<ನಾನು ಮುದುಕನಾಗಿದ್ದೇನೆ; ಯಾವಾಗ ಸಾಯುವೆನೋ ಗೊತ್ತಿಲ್ಲ.3ಆದುದರಿಂದ ನೀನು ಬಿಲ್ಲು ಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು4ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ>> ಎಂದು ಹೇಳಿದನು.5ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು.6ಏಸಾವನು ಬೇಟೆಯಾಡುವುದಕ್ಕೆ ಕಾಡಿಗೆ ಹೋಗಿದ್ದಾಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ, <<ನಿನ್ನ ತಂದೆಯು ನಿನ್ನ ಅಣ್ಣನಾದ ಏಸಾವನಿಗೆ,7<ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ> ಎಂದು ಹೇಳುವುದನ್ನು ಕೇಳಿದ್ದೇನೆ.8ಆದುದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನನ್ನ ಅಪ್ಪಣೆಯಂತೆ ಮಾಡು.9ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ.10ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು>> ಎಂದಳು.11ಅದಕ್ಕೆ ಯಾಕೋಬನು ತನ್ನ ತಾಯಿ ರೆಬೆಕ್ಕಳಿಗೆ, <<ನನ್ನ ಅಣ್ಣನಾದ ಏಸಾವನು ಮೈತುಂಬ ಅಧಿಕವಾಗಿ ರೋಮವುಳ್ಳವನಾಗಿದ್ದಾನೆ. ನಾನು ನುಣುಪಾದ ಚರ್ಮವುಳ್ಳವನು.12ಒಂದು ವೇಳೆ ತಂದೆಯು ನನ್ನನ್ನು ಮುಟ್ಟಿ ನೋಡಿದರೆ ನಾನು ಅವನಿಗೆ ಮೋಸ ಮಾಡುವವನಾಗಿ ಕಂಡು ಬಂದರೆ, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು>> ಎಂದನು.13ಅವನ ತಾಯಿಯು ಅವನಿಗೆ, <<ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ>> ಎಂದು ಹೇಳಿದಳು.14ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ ಸವಿಯೂಟವನ್ನು ಸಿದ್ಧಪಡಿಸಿದಳು.15ಆಮೇಲೆ ರೆಬೆಕ್ಕಳು ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು, ತನ್ನ ಕಿರಿಯ ಮಗನಾದ ಯಾಕೋಬನಿಗೆ ಹೊದಿಸಿದಳು.16ಆ ಆಡಿನ ಮರಿಗಳ ಚರ್ಮಗಳನ್ನು ಅವನ ಕೈಗಳಿಗೂ, ನುಣುಪಾದ ಕೊರಳಿಗೂ ಸುತ್ತಿದಳು.17ನಂತರ ತಾನು ಸಿದ್ಧಮಾಡಿದ್ದ ರುಚಿಪದಾರ್ಥವನ್ನೂ ರೊಟ್ಟಿಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.18ಅವನು ತಂದೆಯ ಬಳಿಗೆ ಹೋಗಿ, <<ಅಪ್ಪಾ>> ಎಂದು ಕರೆಯಲು, ತಂದೆಯು, <<ಏನು ಮಗನೇ, ನೀನು ಯಾರು?>> ಎಂದು ಕೇಳಿದನು.19ಯಾಕೋಬನು ಅವನಿಗೆ, <<ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು>> ಎಂದು ಹೇಳಲು,20ಇಸಾಕನು, <<ಏನು ಮಗನೇ, ಇಷ್ಟು ಬೇಗ ಬೇಟೆ ಹೇಗೆ ಸಿಕ್ಕಿತು>> ಎಂದು ಕೇಳಿದ್ದಕ್ಕೆ ಅವನು, <<ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು>> ಎಂದನು.21ಇಸಾಕನು ಯಾಕೋಬನಿಗೆ, <<ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳಿದುಕೊಳ್ಳಬೇಕು>> ಎಂದು ಹೇಳಿದನು.22ಯಾಕೋಬನು ತನ್ನ ತಂದೆಯ ಹತ್ತಿರಕ್ಕೆ ಬಂದಾಗ ಇಸಾಕನು ಅವನನ್ನು ಮುಟ್ಟಿ ನೋಡಿ, <<ಸ್ವರವೇನೋ ಯಾಕೋಬನ ಸ್ವರವಾಗಿದೆ, ಕೈಗಳು ಏಸಾವನ ಕೈಗಳು>> ಎಂದು ಹೇಳಿದನು.23ಯಾಕೋಬನ ಕೈಗಳು ಏಸಾವನ ಕೈಗಳಂತೆ ರೋಮವುಳ್ಳವುಗಳಾಗಿದ್ದರಿಂದ ಇಸಾಕನು ಅವನ ಗುರುತನ್ನು ಹಿಡಿಯಲಾರದೆ ಅವನನ್ನು ಆಶೀರ್ವದಿಸಿದನು.24ಅವನು, <<ನೀನು ನಿಜವಾದ ನನ್ನ ಮಗನಾದ ಏಸಾವನೋ>> ಎಂದು ಕೇಳಿದ್ದಕ್ಕೆ ಯಾಕೋಬನು, <<ಹೌದು>> ಎನ್ನಲು,25ಇಸಾಕನು, <<ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನು>> ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು.26ಆಮೇಲೆ ಅವನ ತಂದೆಯಾದ ಇಸಾಕನು ಅವನಿಗೆ, <<ಮಗನೇ, ನೀನು ಹತ್ತಿರ ಬಂದು ನನಗೆ ಮುದ್ದಿಡು>> ಎಂದು ಹೇಳಲು ಅವನು ಹತ್ತಿರ ಬಂದು ತಂದೆಗೆ ಮುದ್ದಿಟ್ಟನು.27ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ,<<ಆಹಾ, ನನ್ನ ಮಗನ ಸುವಾಸನೆಯು,
ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವುದು.
28ದೇವರು ನಿನಗೆ ಆಕಾಶದ ಮಂಜನ್ನೂ,ಸಾರವುಳ್ಳ ಭೂಮಿಯನ್ನೂ ಕೊಟ್ಟು
ದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ.
29ಜನಗಳು ನಿನ್ನನ್ನು ಆರಾಧಿಸಲಿ,ಜನಾಂಗಗಳು ನಿನಗೆ ಅಧೀನವಾಗಲಿ.
ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು,
ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ.
ನಿನ್ನನ್ನು ಶಪಿಸುವವರಿಗೆ ಶಾಪವೂ,
ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ>> ಎಂದನು.
ಏಸಾವನು ಆಶೀರ್ವಾದಗಳನ್ನು ಕಳೆದುಕೊಂಡಿದ್ದು
30ಇಸಾಕನು ಅವನನ್ನು ಆಶೀರ್ವದಿಸಿದ ಮೇಲೆ ಯಾಕೋಬನು ತನ್ನ ತಂದೆಯ ಬಳಿಯಿಂದ ಹೊರಟುಹೋದ ಕ್ಷಣವೇ ಅವನ ಅಣ್ಣನಾದ ಏಸಾವನು ಬೇಟೆಯಿಂದ ಬಂದನು.31ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, <<ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು>> ಎಂದು ಹೇಳಿದನು.32ಅವನ ತಂದೆಯಾದ ಇಸಾಕನು, <<ನೀನು ಯಾರು?>> ಎಂದು ಅವನನ್ನು ಕೇಳಲು ಅವನು, <<ನಾನು ನಿನ್ನ ಚೊಚ್ಚಲ ಮಗನಾದ ಏಸಾವನು>> ಎಂದನು.33ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, <<ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು>> ಎಂದನು.34ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ದುಃಖಾಕ್ರಾಂತನಾಗಿ ಬಹಳವಾಗಿ ಅಳುತ್ತಾ, <<ಅಪ್ಪಾ, ತಂದೆಯೇ, ನನ್ನನ್ನು ಸಹ ಆಶೀರ್ವದಿಸು>> ಎಂದು ಬೇಡಿಕೊಳ್ಳಲು ಇಸಾಕನು,35<<ನಿನ್ನ ತಮ್ಮನು ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಆಶೀರ್ವಾದವನ್ನು ಪಡೆದುಕೊಂಡನು>> ಎಂದನು.36ಅದಕ್ಕೆ ಏಸಾವನು, << ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ>> ಎಂದು ಹೇಳಿ ತನ್ನ ತಂದೆಯನ್ನು, <<ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ>> ಎಂದು ಕೇಳಲು,37ಇಸಾಕನು ಏಸಾವನಿಗೆ, <<ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ>> ಎಂದನು.38ಏಸಾವನು ಅವನಿಗೆ, <<ಅಪ್ಪಾ, ತಂದೆಯೇ, ನಿನ್ನಲ್ಲಿ ಒಂದೇ ಒಂದು ಆಶೀರ್ವಾದ ಮಾತ್ರ ಇರುವುದೋ? ಅಪ್ಪಾ, ನನ್ನನ್ನೂ ಆಶೀರ್ವದಿಸಬೇಕು>> ಎಂದು ಹೇಳಿ ಗೋಳಾಡುತ್ತಾ ಅಳಲು,39ಅವನ ತಂದೆಯಾದ ಇಸಾಕನು ಅವನಿಗೆ,<<ಸಾರವುಳ್ಳ ಭೂಮಿಯೂ ಮೇಲಿನಿಂದ ಬೀಳುವ ಆಕಾಶದ ಮಂಜು
ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವುದು.
40ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ
ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ>> ಎಂದು ಹೇಳಿದನು.
ಯಾಕೋಬನು ಓಡಿಹೋದದ್ದು
41ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, <<ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು>> ಎಂದುಕೊಂಡನು.42ಹಿರಿಮಗನಾದ ಏಸಾವನು ಹೇಳಿದ ಮಾತು ರೆಬೆಕ್ಕಳಿಗೆ ತಿಳಿದುಬಂದಾಗ ಆಕೆಯು ತನ್ನ ಕಿರಿಯ ಮಗನಾದ ಯಾಕೋಬನನ್ನು ಕರೆದು ಅವನಿಗೆ, <<ನೋಡು, ನಿನ್ನ ಅಣ್ಣನಾದ ಏಸಾವನು ನಿನ್ನನ್ನು ಕೊಂದು ಸಮಾಧಾನದಿಂದ ಇರಬೇಕೆಂದುಕೊಂಡಿದ್ದಾನೆ.43ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು.44ಕೆಲವು ಕಾಲ, ನಿನ್ನ ಅಣ್ಣನ ಕೋಪವು ಶಮನವಾಗುವ ವರೆಗೂ ಅವನ ಬಳಿಯಲ್ಲೇ ಇರು.45ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು, ತನ್ನ ಕೋಪವನ್ನು ಮರೆತು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಯಿಸುವೆನು. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?>> ಎಂದು ಹೇಳಿದಳು.46ರೆಬೆಕ್ಕಳು ಇಸಾಕನಿಗೆ, <<ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?>> ಎಂದು ಹೇಳಿದಳು.
281ಆಗ ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇನೆಂದರೆ, <<ನೀನು ಕಾನಾನ್ಯರ ಹೆಣ್ಣನ್ನು ಮದುವೆಯಾಗಬಾರದು.2ಪದ್ದನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ.3ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.4ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ>> ಎಂದನು.5ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೂವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.ಏಸಾವನು ಇಷ್ಮಾಯೇಲನ ತಂಗಿಯನ್ನು ಮದುವೆಯಾದದ್ದು
6ಇಸಾಕನು ಯಾಕೋಬನನ್ನು ಆಶೀರ್ವದಿಸಿ ಪದ್ದನ್ ಅರಾಮಿನಲ್ಲಿ ಹೆಣ್ಣನ್ನು ಹುಡುಕಿ ಮದುವೆ ಮಾಡಿಕೊಳ್ಳಲು ಕಳುಹಿಸಿದ್ದನ್ನೂ, ಅವನು ಯಾಕೋಬನನ್ನು ಆಶೀರ್ವದಿಸುವಾಗ ಅವನಿಗೆ, ನೀನು ಕಾನಾನ್ಯರ ಹೆಣ್ಣನ್ನು ತೆಗೆದುಕೊಳ್ಳಬಾರದೆಂದು ಅಪ್ಪಣೆಕೊಟ್ಟದ್ದನ್ನೂ, ಏಸಾವನು ನೋಡಿದನು.7ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ ಸಹ ಏಸಾವನು ನೋಡಿದನು.8ಕಾನಾನ್ಯರ ಹೆಣ್ಣು ಮಕ್ಕಳು ತನ್ನ ತಂದೆಯಾದ ಇಸಾಕನಿಗೆ ಇಷ್ಟವಿಲ್ಲವೆಂದು ಏಸಾವನು ತಿಳಿದುಕೊಂಡನು.9ಏಸಾವನು ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನೂ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತಳನ್ನು ಮದುವೆ ಮಾಡಿಕೊಂಡನು.ಯಾಕೋಬನ ಕನಸು
10ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು.11ಅವನು ಪ್ರಯಾಣಾರ್ಥವಾಗಿ ಹೋಗುತ್ತಿರುವಾಗ ಹೊತ್ತು ಮುಳುಗಿದ್ದರಿಂದ ಆ ರಾತ್ರಿ ಅಲ್ಲಿಯೇ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.12ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.13ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, <<ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ>> ಎಂದನು.16ಯಾಕೋಬನು ನಿದ್ದೆಯಿಂದ ಎಚ್ಚೆತ್ತು, <<ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು>> ಎಂದನು.17ಅವನು ಭಯಪಟ್ಟವನಾಗಿ, <<ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು>> ಎಂದನು.18ಯಾಕೋಬನು ಬೆಳಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನಿಲ್ಲಿಸಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.19ಇದಲ್ಲದೆ ಅವನು ಆ ಸ್ಥಳಕ್ಕೆ << ಬೇತೇಲ್>> ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ <<ಲೂಜ್>> ಎಂದು ಹೆಸರಿತ್ತು.20ಯಾಕೋಬನು ಅಲ್ಲಿ ಪ್ರಮಾಣ ಮಾಡಿ, <<ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,21ತಿರುಗಿ ನನ್ನನ್ನು ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನಗೆ ದೇವರಾಗಿರುವನು.22ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು>> ಎಂದು ಹರಕೆಮಾಡಿಕೊಂಡನು.
29ಯಾಕೋಬನು ರೆಬೆಕ್ಕಳನ್ನು ಸಂಧಿಸಿದ್ದು
1ಆಗ ಯಾಕೋಬನು ಪ್ರಯಾಣ ಮಾಡಿ ಪೂರ್ವ ದಿಕ್ಕಿನ ಜನರ ಸೀಮೆಗೆ ಬಂದನು.2ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು.3ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕುರಿಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರು ಕುಡಿಸಿ ತಿರುಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು.4ಯಾಕೋಬನು ಅವರಿಗೆ, <<ಅಣ್ಣಂದಿರೇ, ನೀವು ಎಲ್ಲಿಯವರು?>> ಎಂದು ಕೇಳಲು ಅವರು, <<ನಾವು ಖಾರಾನ್ ಊರಿನವರು>> ಎಂದರು.5ಅದಕ್ಕೆ ಅವನು ಅವರಿಗೆ, <<ನಾಹೋರನ ಮಗನಾದ ಲಾಬಾನನನ್ನು ನೀವು ಬಲ್ಲಿರೋ?>> ಎಂದು ಕೇಳಿದ್ದಕ್ಕೆ, <<ನಾವು ಅವನನ್ನು ಬಲ್ಲೆವು>> ಎಂದರು.6ಅವನು ಅವರಿಗೆ, <<ಅವನು ಕ್ಷೇಮವಾಗಿದ್ದಾನೋ?>> ಎಂದು ಕೇಳಲು ಅವರು, <<ಕ್ಷೇಮವಾಗಿದ್ದಾನೆ. ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ>> ಎಂದರು.7ಯಾಕೋಬನು ಅವರಿಗೆ, <<ಇನ್ನೂ ಹೊತ್ತು ಬಹಳ ಇದೆ, ಮಂದೆಗಳಿಗೆ ನೀರನ್ನು ಕುಡಿಸಿ ಪುನಃ ಮೇಯಿಸಿಕೊಂಡು ಬನ್ನಿರಿ ಅನ್ನಲು ಅವರು,8ಮಂದೆಗಳೆಲ್ಲವು ಬಂದ ನಂತರ ಅವರು ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆದು; ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ>> ಎಂದರು.ಯಾಕೋಬನು ಲಾಬಾನನ ಹೆಣ್ಣುಮಕ್ಕಳನ್ನು ಮದುವೆಯಾದದ್ದು
9ಅವನು ಅವರೊಂದಿಗೆ ಮಾತನಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು; ಆಕೆಯೇ ಅವುಗಳನ್ನು ಮೇಯಿಸುತ್ತಿದ್ದಳು.10ಯಾಕೋಬನು ತನ್ನ ತಾಯಿಯ ಅಣ್ಣನಾದ ಲಾಬಾನನ ಮಗಳಾದ ರಾಹೇಲಳನ್ನೂ ಲಾಬಾನನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಲಾಬನನ ಕುರಿಗಳಿಗೆ ನೀರು ಕುಡಿಸಿದನು.11ಯಾಕೋಬನು ರಾಹೇಲಳಿಗೆ ಮುದ್ದಿಟ್ಟು ಜೋರಾಗಿ ಅತ್ತು ಆಕೆಗೆ,12<<ನಾನು ನಿನ್ನ ತಂದೆಯ ಸೋದರಳಿಯನೂ ರೆಬೆಕ್ಕಳ ಮಗನಾದ ಯಾಕೋಬನೆಂದು ತಿಳಿಸಿದನು>> ಆಗ ರಾಹೇಲಳು ಓಡಿಹೋಗಿ ಆ ಮಾತನ್ನು ತನ್ನ ತಂದೆಗೆ ತಿಳಿಸಿದಳು.13ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.14ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು ಲಾಬಾನನು ಅವನಿಗೆ, <<ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದಿ>> ಎಂದು ಹೇಳಿದನು.15ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು. ಆ ಮೇಲೆ ಲಾಬಾನನು ಯಾಕೋಬನಿಗೆ, <<ನೀನು ನನ್ನ ಸಂಬಂಧಿಯೆಂದು ಸುಮ್ಮನೆ ಸೇವೆ ಮಾಡುವುದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ?>> ಎಂದು ಕೇಳಿದನು.16ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್.17ಲೇಯಾ ಎಂಬಾಕೆಯ ಕಣ್ಣುಗಳು ಕಾಂತಿ ಹೀನವಾಗಿದ್ದವು. ಆದರೆ ರಾಹೇಲಳು ಬಹು ಸುಂದರಿಯು ಲಾವಣ್ಯವತಿಯೂ ಆಗಿದ್ದಳು.18ಯಾಕೋಬನು ರಾಹೇಲಳನ್ನು ಪ್ರೀತಿಸಿ, <<ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು>> ಎಂದು ಹೇಳಲು,19ಲಾಬಾನನು, <<ಆಕೆಯನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ ನಿನಗೆ ಕೊಡುವುದೇ ಒಳ್ಳೆಯದು. ಆದುದರಿಂದ ನೀನು ನನ್ನ ಸಂಗಡ ವಾಸವಾಗಿರು>> ಎಂದನು.20ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು.21ತರುವಾಯ ಯಾಕೋಬನು ಲಾಬಾನನಿಗೆ, <<ನನಗೆ ಗೊತ್ತು ಮಾಡಿದ ಕಾಲವು ಪೂರ್ತಿಯಾದವು. ರಾಹೇಲಳನ್ನು ನನಗೆ ಮದುವೆಮಾಡಿ ನನ್ನ ಸ್ವಾಧೀನಕ್ಕೆ ಕೊಡು>> ಎಂದು ಕೇಳಿದನು.22ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರೆಸಿ ಔತಣವನ್ನು ಮಾಡಿಸಿದನು.23ಸಾಯಂಕಾಲದಲ್ಲಿ ತನ್ನ ಹಿರೀಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಸಂಗಮಿಸಿದನು.24ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಪಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.25ಬೆಳಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು ಲಾಬಾನನಿಗೆ, <<ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸ ಮಾಡಿದೆ>> ಎಂದು ಕೇಳಿದ್ದಕ್ಕೆ,26ಲಾಬಾನನು, <<ಹಿರಿ ಮಗಳಿಗಿಂತ ಮೊದಲು ಕಿರಿಯ ಮಗಳನ್ನು ಮದುವೆ ಮಾಡಿಸಿಕೊಡುವುದು ನಮ್ಮ ದೇಶದ ಪದ್ಧತಿಯಲ್ಲ.27ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ಈ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು>> ಅಂದನು.28ಯಾಕೋಬನು ಅದಕ್ಕೆ ಒಪ್ಪಿ ಹಿರಿಯವಳ ಮದುವೆಯ ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಯಾಕೋಬನಿಗೆ ಮದುವೆ ಮಾಡಿ ಕೊಟ್ಟನು.29ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಬಿಲ್ಹಾ ಎಂಬ ದಾಸಿಯನ್ನು ಕೂಡ ಕೊಟ್ಟನು.30ಯಾಕೋಬನು ರಾಹೇಲಳನ್ನೂ ಸಂಗಮಿಸಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳು ವರ್ಷ ಸೇವೆಮಾಡಿದನು.ಯಾಕೋಬನಿಗೆ ಮಕ್ಕಳು ಹುಟ್ಟಿದ್ದು
31ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.32ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, <<ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ <ರೂಬೇನ್ ಎಂದು> ಹೆಸರಿಟ್ಟಳು.>>33ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, <<ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ <ಸಿಮೆಯೋನ್> ಎಂದು ಹೆಸರಿಟ್ಟಳು.>>34ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, <<ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ>> ಎಂದು ಹೇಳಿ ಅದಕ್ಕೆ <<ಲೇವಿಯೆಂದು>> ಹೆಸರಿಟ್ಟಳು.35ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, <<ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು>> ಎಂದು ಹೇಳಿ ಅದಕ್ಕೆ <<ಯೆಹೂದಾ>> ಎಂದು ಹೆಸರಿಟ್ಟಳು. ಆ ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು.
301ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು, ಯಾಕೋಬನಿಗೆ, <<ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು>> ಎಂದು ಹೇಳಿದಳು.2ಯಾಕೋಬನು ರಾಹೇಲಳ ಮೇಲೆ ಕೋಪಗೊಂಡು, <<ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ>> ಎಂದನು.3ಅದಕ್ಕೆ ಆಕೆಯು, <<ನನ್ನ ದಾಸಿಯಾದ ಬಿಲ್ಹಾ ಇದ್ದಾಳಲ್ಲಾ, ಅವಳನ್ನು ಸಂಗಮಿಸು, ಅವಳು ಬಸುರಾದರೆ ಆ ಮಗುವನ್ನು ನನ್ನ ಮಡಿಲಲ್ಲಿ ಹಾಕಲಿ. ಆಗ ನನಗೂ ಸಂತಾನವಾಗುವುದು>> ಎಂದು ಹೇಳಿ,4ತನ್ನ ದಾಸಿಯಾದ ಬಿಲ್ಹಳನ್ನು ಯಾಕೋಬನಿಗೆ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.5ಯಾಕೋಬನು ಅವಳನ್ನು ಸಂಗಮಿಸಲು ಬಿಲ್ಹಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆರಲು,6ರಾಹೇಲಳು, <<ದೇವರು ನನ್ನ ಕಡೆಗೆ ನ್ಯಾಯತೀರಿಸಿದ್ದಾನೆ. ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ>> ಎಂದು ಹೇಳಿ ಅದಕ್ಕೆ <<ದಾನ್>> ಎಂದು ಹೆಸರಿಟ್ಟಳು.7ರಾಹೇಲಳ ದಾಸಿಯಾದ ಬಿಲ್ಹಳು ತಿರುಗಿ ಬಸುರಾಗಿ ಯಾಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆರಲು,8ರಾಹೇಲಳು, <<ನನ್ನ ಅಕ್ಕನ ಸಂಗಡ ಬಲವಾಗಿ ಹೋರಾಡಿ ಜಯಿಸಿದ್ದೇನೆ>> ಎಂದು ಹೇಳಿ ಅದಕ್ಕೆ <<ನಫ್ತಾಲಿ>> ಎಂದು ಹೆಸರಿಟ್ಟಳು.9ಲೇಯಳು ತನಗೆ ಹೆರಿಗೆ ನಿಂತುಹೋಗಿರುವುದನ್ನು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ಯಾಕೋಬನ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.10ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಗಂಡು ಮಗುವನ್ನು ಹೆರಲು,11ಲೇಯಳು, <<ನನಗೆ ಶುಭವಾಯಿತೆಂದು>> ಹೇಳಿ ಅದಕ್ಕೆ <<ಗಾದ್>> ಎಂದು ಹೆಸರಿಟ್ಟಳು.12ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಇನ್ನೊಂದು ಗಂಡು ಮಗುವನ್ನು ಹೆರಲು,13ಲೇಯಳು, <<ನಾನು ಧನ್ಯಳಾದೆ, ಸ್ತ್ರೀಯರು ನನ್ನನ್ನು ಧನ್ಯಳೆಂದು ಹೊಗಳುವರು>> ಎಂದು ಹೇಳಿ ಅದಕ್ಕೆ <<ಆಶೇರ್>> ಎಂದು ಹೆಸರಿಟ್ಟಳು.14ಗೋದಿ ಸುಗ್ಗಿಯ ಕಾಲದಲ್ಲಿ ರೂಬೇನನು ಅಡವಿಗೆ ಹೋಗಿದ್ದಾಗ ಕಾಮಜನಕ ಹಣ್ಣುಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ, <<ನಿನ್ನ ಮಗನು ತಂದಿರುವ ಕಾಮಜನಕ ಹಣ್ಣುಗಳಲ್ಲಿ ಕೆಲವನ್ನು ನನಗೆ ಕೊಡು>> ಎಂದು ಕೇಳಿಕೊಂಡಳು.15ಅದಕ್ಕೆ ಲೇಯಳು, <<ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?>> ಎಂದು ಹೇಳಲು ರಾಹೇಲಳು, <<ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ>> ಎಂದಳು.16ಸಾಯಂಕಾಲದಲ್ಲಿ ಯಾಕೋಬನು ಅಡವಿಯಿಂದ ಬರುವಾಗ ಲೇಯಳು ಅವನೆದುರಿಗೆ ಹೋಗಿ, <<ನೀನು ನನ್ನಲ್ಲಿ ಬರಬೇಕು, ನಾನು ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ>> ಎಂದಳು. ಆ ಹೊತ್ತು ರಾತ್ರಿ ಅವನು ಆಕೆಯೊಂದಿಗೆ ಇದ್ದನು.17ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದನು. ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಗಂಡು ಮಗುವನ್ನು ಹೆತ್ತಳು.18ಲೇಯಳು, <<ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ>> ಎಂದು ಹೇಳಿ ಅದಕ್ಕೆ << ಇಸ್ಸಾಕಾರ್>> ಎಂದು ಹೆಸರಿಟ್ಟಳು.19ಲೇಯಳು ಪುನಃ ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಗಂಡು ಮಗುವನ್ನು ಹೆತ್ತಳು.20ಲೇಯಳು, <<ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾನೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು>> ಎಂದು ಹೇಳಿ ಅದಕ್ಕೆ << ಜೆಬುಲೂನ್>> ಎಂದು ಹೆಸರಿಟ್ಟಳು.21ತರುವಾಯ ಆಕೆಯು ಹೆಣ್ಣು ಮಗುವನ್ನು ಹೆತ್ತು ಅದಕ್ಕೆ <<ದೀನಾ>> ಎಂದು ಹೆಸರಿಟ್ಟಳು.22ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.23ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, <<ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ>> ಎಂದಳು.24ಇದಲ್ಲದೆ ಆಕೆಯು, <<ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸುವನು>> ಎಂದು ಹೇಳಿ ಅದಕ್ಕೆ <<ಯೋಸೇಫ್>> ಎಂದು ಹೆಸರಿಟ್ಟಳು.ಯಾಕೋಬನ ಮತ್ತು ಲಾಬಾನನ ಆಡುಕುರಿಗಳು
25ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ, <<ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು.26ನಾನು ಸೇವೆಮಾಡಿ ಪಡೆದುಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡಬೇಕು.27ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ>> ಎಂದು ಹೇಳಲು ಲಾಬಾನನು ಅವನಿಗೆ, <<ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.28ನಾನು ನಿನಗೆ ಏನು ಕೊಡಬೇಕು ಹೇಳು ಕೊಡುತ್ತೇನೆ>> ಎಂದು ಹೇಳಿದನು.29ಅದಕ್ಕೆ ಯಾಕೋಬನು, <<ನಾನು ನಿನಗೆ ಮಾಡಿದ ಸೇವೆಯನ್ನೂ ನನ್ನ ವಶದಲ್ಲಿದ್ದ ನಿನ್ನ ಪಶುಪ್ರಾಣಿಗಳು ಅಭಿವೃದ್ದಿಯಾದುದ್ದನ್ನೂ ನೀನು ಬಲ್ಲೇ.30ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ>> ಎಂದು ಹೇಳಿದನು.31ಅದಕ್ಕೆ ಲಾಬಾನನು, <<ನಿನಗೆ ನಾನೇನು ಕೊಡಬೇಕು ಹೇಳು>> ಅನ್ನಲು ಯಾಕೋಬನು, <<ನನಗೆ ಏನೂ ಕೊಡಬೇಡ, ನೀನು ನನಗೆ ಈ ಒಂದು ಕಾರ್ಯ ಮಾತ್ರ ಮಾಡಿದರೆ ಸಾಕು, ನಾನು ಪುನಃ ನಿನ್ನ ಹಿಂಡನ್ನು ಮೇಯಿಸಿ ಕಾಯುವೆನು>>32ಅದೇನೆಂದರೆ, <<ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ, ಕುರಿಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ, ಆಡುಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವುಗಳನ್ನೂ ವಿಂಗಡಿಸುವೆನು. ಅವೇ ನನ್ನ ಸಂಬಳವಾಗಿರಲಿ.33ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿ ಕೊಡುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆಗಳಿಲ್ಲದ್ದು, ಕುರಿಗಳಲ್ಲಿ ಕಪ್ಪಿಲ್ಲದ್ದು, ನನ್ನ ಬಳಿಯಲ್ಲಿ ಸಿಕ್ಕಿದರೆ ಅದನ್ನು ಕದ್ದದ್ದೆಂದು ಎಣಿಸಬಹುದು>> ಎಂದನು.34ಅದಕ್ಕೆ ಲಾಬಾನನು, <<ಒಳ್ಳೆಯದು, ನೀನು ಹೇಳಿದಂತೆಯೇ ಆಗಲಿ>> ಎಂದನು.35ಅದೇ ದಿನ ಲಾಬಾನನು ಆಡುಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ, ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದುವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಕೊಟ್ಟನು.36ಲಾಬಾನನು ತನಗೂ, ಯಾಕೋಬನಿಗೂ ಮೂರು ದಿನದ ಪ್ರಯಾಣದಷ್ಟು ದೂರ ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಹಿಂಡಿನಲ್ಲಿ ಮಿಕ್ಕಾದವುಗಳನ್ನು ಮೇಯಿಸಿದನು.37ಹೀಗಿರುವಲ್ಲಿ ಯಾಕೋಬನು ಚಿನಾರು, ಬಾದಾಮಿ, ಅರ್ಮೋನ್ ಎಂಬ ಮರಗಳ ಹಸಿ ಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು,38ಅವುಗಳಲ್ಲಿರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿದನು. ಆ ಕೋಲುಗಳನ್ನು ಆಡುಕುರಿಗಳ ಹಿಂಡು ನೀರು ಕುಡಿಯುವ ತೊಟ್ಟಿಗಳಲ್ಲಿ ಇಟ್ಟನು. ಆಡುಕುರಿಗಳಿಗೆ ನೀರು ಕುಡಿಯುವ ಸಮಯ, ಸಂಗಮ ಸಮಯ.39ಆಡುಕುರಿಗಳು ಆ ಕೋಲುಗಳನ್ನು ನೋಡುತ್ತಾ ಸಂಗಮಮಾದಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.40ಯಾಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದು ಪ್ರತ್ಯೇಕಿಸಿದನು ಮತ್ತು ಲಾಬಾನನ ಆಡು ಕುರಿಗಳ ಮುಖಗಳನ್ನು ರೇಖೆಯುಳ್ಳ ಆ ಆಡುಗಳ ಮತ್ತು ಕಪ್ಪಾದ ಕುರಿಗಳ ಕಡೆಗೆ ತಿರುಗಿಸಿದನು.41ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ತೊಟ್ಟಿಗಳಲ್ಲಿ ಕೋಲುಗಳನ್ನಿಟ್ಟನು. ಆದರೆ ಆಡುಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ತೊಟ್ಟಿಗಳಲ್ಲಿ ಇಡುತ್ತಿರಲಿಲ್ಲ.42ಹೀಗಾಗಿ ಬಲಹೀನವಾದ ಹಿಂಡು ಲಾಬಾನನ ಪಾಲಿಗೆ ಬಂದವು, ಬಲಿಷ್ಠವಾದವುಗಳು ಯಾಕೋಬನು ಪಾಲಿಗೆ ಬಂದವು.43ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು.
31ಯಾಕೋಬನು ಲಾಬಾನನಿಂದ ಓಡಿ ಹೋದದ್ದು
1<<ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು>> ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.2ಇದಲ್ಲದೆ ಯಾಕೋಬನು ಲಾಬಾನನ ಮುಖಭಾವವನ್ನು ನೋಡಿದಾಗ ಅದು ಮೊದಲಿದ್ದಂತೆ ತೋರಲಿಲ್ಲ.3ಮತ್ತು ಯೆಹೋವನು ಯಾಕೋಬನಿಗೆ, <<ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು>> ಎಂದು ಹೇಳಿದನು.4ಹೀಗಿರುವುದರಿಂದ ಯಾಕೋಬನು ರಾಹೇಲಳನ್ನೂ, ಲೇಯಳನ್ನೂ, ತನ್ನ ಆಡುಕುರಿಗಳ ಹಿಂಡನ್ನು ಮೇಯಿಸುತ್ತಿದ್ದ ಅಡವಿಗೆ ಕರೆಕಳುಹಿಸಿ5ಅವರಿಗೆ ಹೇಳಿದ್ದೇನಂದರೆ, <<ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.6ನಾನು ನಿಮ್ಮ ತಂದೆಯ ಸೇವೆಯನ್ನು ಪೂರ್ಣಬಲದಿಂದ ಮಾಡಿದ್ದೇನೆ, ನೀವೂ ಅದನ್ನು ಬಲ್ಲಿರಿ.7ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.8ನಿಮ್ಮ ತಂದೆ ನನಗೆ, <ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ> ಎಂದು ಅವನು ಹೇಳಿದಾಗ ಹಿಂಡಿನ ಆಡುಕುರಿಗಳೆಲ್ಲವೂ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು <ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ> ಎಂದು ಹೇಳಿದಾಗ ಆಡುಕುರಿಗಳೆಲ್ಲವೂ ರೇಖೆಯುಳ್ಳ ಮರಿಗಳನ್ನೇ ಈದವು.9ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು, ಪಶುಪ್ರಾಣಿಗಳನ್ನು ಅವನಿಂದ ತೆಗೆದು ನನಗೆ ಕೊಟ್ಟನು.10<<ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು.11ಆ ಕನಸಿನಲ್ಲಿ ದೇವದೂತನು, <ಯಾಕೋಬನೇ> ಎಂದು ಕರೆಯಲು ನಾನು, <ಇದ್ದೇನೆ> ಎಂದು ಹೇಳಿದಾಗ12ಆತನು ನನಗೆ, <ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ.13ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು> >> ಎಂದು ಹೇಳಿದನು.14ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು, <<ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಸ್ವಾಸ್ತ್ಯತೆ ಇನ್ನೇನಿದೆ?15ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ.16ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಆಸ್ತಿಯನ್ನೆಲ್ಲಾ ನಮಗೂ, ನಮ್ಮ ಮಕ್ಕಳಿಗೂ ಕೊಟ್ಟನಲ್ಲಾ, ದೇವರು ನಿನಗೆ ಹೇಳಿದಂತೆಯೇ ಮಾಡು>> ಎಂದು ಉತ್ತರ ಕೊಟ್ಟರು.17ಆಗ ಯಾಕೋಬನು ತನ್ನ ಮಕ್ಕಳನ್ನೂ, ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿದನು.18ತಾನು ಸಂಪಾದಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಪದ್ದನ್ ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಪ್ರಾಣಿಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವುದಕ್ಕಾಗಿ ಹೊರಟನು.19ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.20ಆದರೆ ಯಾಕೋಬನು ತಾನು ಹೋಗುತ್ತೇನೆಂದು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಅವನನ್ನು ಮೋಸಗೊಳಿಸಿ ಹೊರಟುಬಿಟ್ಟನು.21ಹೀಗೆ ಅವನು ತನ್ನ ಆಸ್ತಿಯನ್ನೆಲ್ಲಾ ತೆಗೆದುಕೊಂಡು ಯೂಫ್ರೆಟಿಸ್ ಮಹಾ ನದಿಯನ್ನು ದಾಟಿ ಗಿಲ್ಯಾದೆಂಬ ಬೆಟ್ಟದ ಸೀಮೆಯ ದಾರಿಯನ್ನು ಹಿಡಿದನು.ಲಾಬಾನನ್ನು ಯಾಕೋಬನನ್ನು ಬೆನ್ನಟ್ಟಿದ್ದು
22ಯಾಕೋಬನು ಹೊರಟುಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬಾನನಿಗೆ ತಿಳಿದುಬರಲು,23ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.24ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, <<ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು>> ಎಂದನು.25ತರುವಾಯ ಲಾಬಾನನೂ ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಕೊಂಡನು.26ಲಾಬಾನನು ಯಾಕೋಬನಿಗೆ, <<ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಹೊರಟುಬಂದೆಯಲ್ಲಾ.27ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು.28ಆದರೆ ನೀನು ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ, ಮುದ್ದಿಡುವುದಕ್ಕಾದರೂ ಆಗದಂತೆ ಮಾಡಿದಿ. ನೀನು ಮಾಡಿದ್ದು ಹುಚ್ಚು ಕೆಲಸ.29ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, <ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು> ಎಂದು ಹೇಳಿದನು.30ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?>> ಎಂದು ಕೇಳಿದನು.31ಅದಕ್ಕೆ ಯಾಕೋಬನು ಲಾಬಾನನಿಗೆ, <<ನೀನು ನಿನ್ನ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವಿ ಎಂದು ಭಯಪಟ್ಟು ಹೊರಟು ಬಂದೆನು.32ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವರು ಸಾಯಲಿ. ನಮ್ಮ ಬಂಧುಗಳ ಮುಂದೆಯೇ ನನ್ನ ಆಸ್ತಿಯನ್ನು ಪರೀಕ್ಷಿಸಬಹುದು. ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ>> ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ.33ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು.34ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ.35ರಾಹೇಲಳು ತನ್ನ ತಂದೆಗೆ, <<ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ>> ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು.36ಆಗ ಯಾಕೋಬನು ಕೋಪಗೊಂಡು ಲಾಬಾನನನ್ನು ಗದರಿಸಿ, <<ನೀನು ಇಷ್ಟು ಆತುರ ಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹ ಮಾಡಿದೆನು?37ನನ್ನ ವಸ್ತುಗಳನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನ ಬಳಗದವರ ಮುಂದೆಯೂ ನಿನ್ನ ಬಂಧುಗಳ ಮುಂದೆಯೂ ಅದನ್ನು ತಂದು ಇಡು. ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.38<<ನಾನು ಇಪ್ಪತ್ತು ವರ್ಷ ನಿನ್ನ ಸಂಗಡ ಇದ್ದೆನು. ನಿನ್ನ ಹಿಂಡಿನ ಹೆಣ್ಣು ಆಡುಕುರಿಗಳನ್ನು ಕಂದು ಹಾಕಲಿಲ್ಲ. ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ.39ಕಾಡುಮೃಗಗಳಿಂದ ಕೊಲ್ಲಲ್ಪಟ್ಟ ಕುರಿ, ಆಡುಗಳನ್ನು ನಿನ್ನ ಭಾಗಕ್ಕೆ ಹಾಕದೆ ನಾನೇ ನಷ್ಟವನ್ನು ಹೊತ್ತೆನು. ಹಗಲಿನಲ್ಲಿ, ಇರುಳಿನಲ್ಲಿ ಕಳೆದು ಹೋದದ್ದರ ಲೆಕ್ಕವನ್ನು ನನ್ನಿಂದ ತೆಗೆದುಕೊಂಡೆ.40ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ದೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು.41ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.42ನನ್ನ ತಂದೆಯಾದ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು>> ಎಂದನು.ಯಾಕೋಬನಿಗೂ ಲಾಬಾನನಿಗೂ ಆದ ಒಪ್ಪಂದ
43ಅದಕ್ಕೆ ಲಾಬಾನನು ಯಾಕೋಬನಿಗೆ, <<ಈ ಪುತ್ರಿಯರು ನನ್ನ ಪುತ್ರಿಯರಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣು ಮುಂದೆ ಇರುವುದೆಲ್ಲವೂ ನನ್ನದೇ. ಹಾಗಾದರೆ ಈ ನನ್ನ ಪುತ್ರಿಯರಿಗೋಸ್ಕರವೂ, ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡಲಿ?44ಆದುದರಿಂದ ನಾವಿಬ್ಬರು ಸೇರಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ ಬಾ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ>> ಎಂದು ಹೇಳಿದನು.45ಆಗ ಯಾಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ತಂಭವಾಗಿ ನಿಲ್ಲಿಸಿದನು.46ಯಾಕೋಬನು ತನ್ನ ಕಡೆಯವರಿಗೆ, <<ಕಲ್ಲುಗಳನ್ನು ಕೂಡಿಸಿರಿ>> ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಗುಡ್ಡೆ ಮಾಡಿದರು. ಅವರೆಲ್ಲರೂ ಆ ಗುಡ್ಡೆಯ ಬಳಿಯಲ್ಲಿ ಭೋಜನವನ್ನು ಮಾಡಿದರು.47ಆ ಗುಡ್ಡೆಗೆ ಲಾಬಾನನು << ಯಗರಸಾಹದೂತ>> ಎಂದೂ ಯಾಕೋಬನು << ಗಲೇದ್>> ಎಂದೂ ಹೆಸರಿಟ್ಟರು.48ಆಗ ಲಾಬಾನನು, <<ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಗುಡ್ಡೆಯೇ ಸಾಕ್ಷಿ>> ಎಂದು ಹೇಳಿದುದರಿಂದ ಅದಕ್ಕೆ ಗಲೇದ್ ಎಂದು ಹೆಸರಾಯಿತು.49ಅದಲ್ಲದೆ ಅವನು, <<ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರುವನು>> ಎಂದು ಹೇಳಿದ್ದರಿಂದ ಅದಕ್ಕೆ ಮಿಚ್ಪಾ ಎಂದು ಹೆಸರಾಯಿತು50ಮತ್ತು ಲಾಬಾನನು, <<ನೀನು ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ>> ಎಂದನು.51ಇದಲ್ಲದೆ ಲಾಬಾನನು ಯಾಕೋಬನಿಗೆ, <<ನಿನಗೂ ನನಗೂ ನಡುವೆ ನಾನು ನಿಲ್ಲಿಸಿರುವ ಈ ಸ್ತಂಭವನ್ನು ನೋಡು, ಈ ಗುಡ್ಡೆಯನ್ನೂ ನೋಡು.52ನಾನು ಕೇಡು ಮಾಡುವುದಕ್ಕೋಸ್ಕರ ಈ ಗುಡ್ಡೆಯನ್ನು, ದಾಟಿ ನಿನ್ನ ಬಳಿಗೆ ಬರುವುದಿಲ್ಲ. ಹಾಗೆಯೇ ನೀನು ಈ ಗುಡ್ಡೆಯನ್ನೂ ಈ ಸ್ತಂಭವನ್ನು ದಾಟಿ ನನ್ನ ಬಳಿಗೆ ಬರಕೂಡದು. ಇದಕ್ಕೆ ಈ ಗುಡ್ಡೆಯೂ ಸ್ತಂಭವೂ ಸಾಕ್ಷಿಯಾಗಿರಲಿ.53ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ>> ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.54ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.55ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು.
32ಯಾಕೋಬನ ದೈವಪುರುಷನೊಂದಿಗೆ ಹೋರಾಟ
1ಯಾಕೋಬನು ಮುಂದೆ ಪ್ರಯಾಣಮಾಡಲು ದೇವದೂತರು ಅವನೆದುರಿಗೆ ಬಂದರು.2ಯಾಕೋಬನು ಅವರನ್ನು ನೋಡಿದಾಗ, <<ಇದು ದೇವರ ಸೇನಾನಿವೇಶ>> ಎಂದು ಹೇಳಿ ಆ ಸ್ಥಳಕ್ಕೆ << ಮಹನಯಿಮ್>> ಎಂದು ಹೆಸರಿಟ್ಟನು.3ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.4ಕಳುಹಿಸುವಾಗ ಅವರಿಗೆ <<ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, <ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು5ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ> >> ಎಂದು ಹೇಳಿರಿ ಅಂದನು.6ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, <<ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ>> ಎಂದು ಹೇಳಿದಾಗ,7ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.8ಏಕೆಂದರೆ, <<ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು>> ಅಂದುಕೊಂಡನು.9ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, <<ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, <ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು> ನನಗೆ ವಾಗ್ದಾನ ಮಾಡಿದ ಯೆಹೋವನೇ,10ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.11ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ,12<ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?> >> ಎಂದನು.13ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.14ಇನ್ನೂರು ಆಡುಕುರಿ, ಇಪ್ಪತ್ತು ಹೋತ, ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ15ಮೂವತ್ತು ಒಂಟೆ, ನಲ್ವತ್ತು ಆಕಳು, ಹತ್ತು ಹೋರಿ ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತೆಗೆದುಕೊಂಡನು.16ಇವುಗಳಲ್ಲಿ ಪ್ರತಿಯೊಂದು ಹಿಂಡನ್ನು ತನ್ನ ಸೇವಕನಿಗೆ ಒಪ್ಪಿಸಿ, <<ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿ ಹೋಗಿರಿ ಮತ್ತು ಪ್ರತಿ ಹಿಂಡು ಹಿಂಡಿಗೂ ಮಧ್ಯದಲ್ಲಿ ಅಂತರವಿರಲಿ>> ಎಂದನು.17ಮೊದಲನೆಯ ಹಿಂಡಿನ ಮೇಲ್ವಿಚಾರಕನಿಗೆ, <<ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು, <ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತೀ? ನಿನ್ನ ಮುಂದೆ ಇರುವ ಇವೆಲ್ಲಾ ಯಾರದು?> >> ಎಂದು ಕೇಳಿದರೆ,18ಆಗ ನೀನು, <<ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ>> ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು.19ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, <<ನೀವು ಏಸಾವನನ್ನು ನೋಡುವಾಗ ಇದೇ ರೀತಿಯಾಗಿ ಹೇಳಬೇಕು. ನಿನ್ನ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಿದ್ದಾನೆ ಎನ್ನಿರಿ>> ಎಂದು ಅಪ್ಪಣೆಕೊಟ್ಟನು.20ಯಾಕೋಬನು ತನ್ನೊಳಗೆ, <<ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ>> ಎಂದುಕೊಂಡನು.21ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟು ಹೋಯಿತು. ತಾನು ಆ ರಾತ್ರಿ ತನ್ನ ಪಾಳೆಯದಲ್ಲೇ ಉಳಿದುಕೊಂಡನು.22ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.23ಅವರನ್ನೂ, ತನ್ನ ಆಸ್ತಿಯೆಲ್ಲವನ್ನೂ ದಾಟಿಸಿದ ಮೇಲೆ24ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.25ಆ ಪುರುಷನು ತಾನು ಗೆಲ್ಲದೆ ಇರುವುದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು.26ಆ ಪುರುಷನು, <<ನನ್ನನ್ನು ಬಿಡು, ಬೆಳಗಾಗುತ್ತಿದೆ>> ಎನ್ನಲು, ಯಾಕೋಬನು, <<ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ>> ಎಂದನು.27ಆ ಪುರುಷನು, <<ನಿನ್ನ ಹೆಸರೇನು?>> ಎಂದು ಕೇಳಿದ್ದಕ್ಕೆ ಅವನು, <<ಯಾಕೋಬನು>> ಎಂದಾಗ,28ಅವನು ಯಾಕೋಬನಿಗೆ, <<ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ <ಇಸ್ರಾಯೇಲ್> ಎಂದು ಹೆಸರಾಗುವುದು>> ಎಂದು ಹೇಳಿದನು.29ಯಾಕೋಬನು, <<ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು>> ಎಂದು ಅವನನ್ನು ಕೇಳಿಕೊಂಡಾಗ ಆತನು, <<ನನ್ನ ಹೆಸರನ್ನು ವಿಚಾರಿಸುವುದೇಕೆ?>> ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.30ಆಗ ಯಾಕೋಬನು, <<ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ>> ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,31ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.32ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.
33ಯಾಕೋಬನು ಏಸಾವನನ್ನು ಸಂಧಿಸಿದ್ದು
1ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಜನರ ಸಮೇತ ಬರುವುದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ2ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ನಿಲ್ಲಿಸಿದನು.3ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು.4ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು.5ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, <<ನಿನ್ನ ಜೊತೆಯಲ್ಲಿರುವ ಜನರು ಯಾರು?>> ಎಂದು ಕೇಳಲು ಯಾಕೋಬನು ಅವನಿಗೆ, <<ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು>> ಎಂದು ಹೇಳಿದನು.6ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ಅಡ್ಡಬಿದ್ದರು.7ಆ ಮೇಲೆ ಲೇಯಳು ತನ್ನ ಮಕ್ಕಳೊಡನೆ ಬಂದು ಅಡ್ಡಬಿದ್ದಳು. ಕೊನೆಗೆ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.8ಏಸಾವನು, <<ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?>> ಎಂದು ಕೇಳಲು ಯಾಕೋಬನು, <<ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು>> ಎಂದನು.9ಏಸಾವನು ಅದಕ್ಕೆ, <<ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು, ನಿನ್ನದು ನಿನಗೇ ಇರಲಿ>> ಎನ್ನಲು,10ಯಾಕೋಬನು, <<ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ.11ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು>> ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು.12ತರುವಾಯ ಏಸಾವನು, <<ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ಮುಂದಾಗಿ ಹೋಗುತ್ತೇನೆ>> ಎಂದನು.13ಅದಕ್ಕೆ ಯಾಕೋಬನು, <<ನನ್ನ ಮಕ್ಕಳು ಎಳೇ ಪ್ರಾಯದವರು ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ಪ್ರಭುವಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಆಡುಕುರಿಗಳ ಹಿಂಡುಗಳೆಲ್ಲವೂ ಸತ್ತು ಹೋದಾವು.14ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೋಗಬಹುದು ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ>> ಎಂದನು.15ಏಸಾವನು, <<ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ>> ಎನ್ನಲು ಯಾಕೋಬನು, <<ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು>> ಎಂದು ಹೇಳಿದನು.16ಹೀಗೆ ಏಸಾವನು ಆ ದಿನವೇ ಸೇಯೀರ್ ಸೀಮೆಗೆ ಹೊರಟುಹೋದನು.17ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ <<ಸುಕ್ಕೋತ್>> ಎಂದು ಹೆಸರಾಯಿತು.ಯಾಕೋಬನು ಶೆಕೆಮ್ ಪಟ್ಟಣವನ್ನು ಸೇರಿದ್ದು
18ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸುರಕ್ಷಿತವಾಗಿ ಸೇರಿದನು. ಆ ಊರಿನ ಬಳಿಯಲ್ಲಿ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.19ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂಮಿಯನ್ನು ಹಮೋರನ ಮಕ್ಕಳಿಗೆ ನೂರು ನಾಣ್ಯ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ.20ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ << ಏಲ್ ಎಲೋಹೆ ಇಸ್ರಾಯೇಲ್>> ಎಂದು ಹೆಸರಿಟ್ಟನು.
34ದೀನ ಮತ್ತು ಶೆಕೆಮಿನವರು
1ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದ ಮಗಳಾದ ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡುವುದಕ್ಕೆ ಹೊರಗೆ ಬಂದಳು.2ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.3ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.4ಶೆಕೆಮನು ತನ್ನ ತಂದೆಯಾದ ಹಮೋರನಿಗೆ, <<ನೀನು ಈ ಹುಡುಗಿಯನ್ನು ನನಗೆ ಮದುವೆಮಾಡಿಸಬೇಕು>> ಎಂದು ಕೇಳಿಕೊಂಡನು.5ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು.6ಅಷ್ಟರಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು.7ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.8ಹಮೋರನು ಅವರಿಗೆ, <<ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಶೆಯಿಂದ ಮೋಹಿಸಿದ್ದಾನೆ, ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.9ಇದಲ್ಲದೆ ನೀವು ನಮ್ಮಲ್ಲೇ ವಾಸವಾಗಿದ್ದು ನಿಮ್ಮ ಹೆಣ್ಣು ಮಕ್ಕಳನ್ನು ನಮಗೆ ಕೊಡುತ್ತಾ ನಮ್ಮ ಹೆಣ್ಣುಮಕ್ಕಳನ್ನು ನೀವು ತೆಗೆದುಕೊಳ್ಳುತ್ತಾ ನಮ್ಮೊಂದಿಗೆ ಬೀಗರಾಗಿರಿ.10ದೇಶವೆಲ್ಲಾ ನಿಮ್ಮ ಮುಂದೆ ಇದೆ ಅಲ್ಲಿ ವಾಸಮಾಡಿಕೊಂಡು ವ್ಯಾಪಾರ ಮಾಡಿ, ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು>> ಎಂದು ಹೇಳಿದನು.11ಬಳಿಕ ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ, <<ನಿಮ್ಮ ದಯೆ ನನ್ನ ಮೇಲೆ ಇರಲಿ, ನೀವು ಹೇಳುವಷ್ಟು ಕೊಡುತ್ತೇನೆ.12ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ>> ಎಂದನು.13ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು.14ಯಾಕೋಬನ ಮಕ್ಕಳು ಅವರಿಗೆ, <<ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವುದಕ್ಕಾಗುವುದಿಲ್ಲ, ಹಾಗೆ ಕೊಡುವುದು ನಮಗೆ ಅವಮಾನ.15ನಿಮ್ಮಲ್ಲಿನ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡು ನಮ್ಮ ಹಾಗೆ ಆಗಬೇಕು. ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪುವೆವು.16ನಮ್ಮ ಹೆಣ್ಣುಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು.17ಆದರೆ ನೀವು ನಮ್ಮ ಮಾತಿಗೆ ಒಪ್ಪದೆ ಸುನ್ನತಿ ಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟು ಹೋಗುತ್ತೇವೆ>> ಎಂದನು.18ಅವರ ಮಾತುಗಳು ಹಮೋರನಿಗೂ, ಅವನ ಮಗನಾದ ಶೆಕೆಮನಿಗೂ ಒಳ್ಳೆಯದೆಂದು ತೋಚಿತು.19ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.20ಆಗ ಹಮೋರನೂ ಅವನ ಮಗನಾದ ಶೆಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ,21<<ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ನಮ್ಮ ದೇಶದಲ್ಲೇ ವಾಸ ಮಾಡಿಕೊಂಡು ವ್ಯಾಪಾರ ಮಾಡಲಿ. ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣುಮಕ್ಕಳನ್ನು ಮದುವೆಮಾಡಿಕೊಳ್ಳೋಣ ನಮ್ಮ ಹೆಣ್ಣುಮಕ್ಕಳನ್ನು ಅವರಿಗೆ ಕೊಡೋಣ.22<<ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕನ್ನುತ್ತಾರೆ. ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸ ಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುವರು.23ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ>> ಎಂದು ಹೇಳಿದನು.24ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು.ದೀನಳ ಸಹೋದರರು ಪ್ರತಿಕಾರ ಮಾಡಿದ್ದು
25ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು.26ಊರಿನವರ ಮೇಲೆ ಬಿದ್ದು ಹಮೋರ ಮತ್ತು ಅವನ ಮಗನಾದ ಶೆಕೆಮ್ ಸಹಿತವಾಗಿ ಪುರುಷರೆಲ್ಲರನ್ನೂ ದಾಕ್ಷಿಣ್ಯವಿಲ್ಲದೆ ಕತ್ತಿಯಿಂದ ಕೊಂದು ಶೆಕೆಮನ ಮನೆಯಿಂದ ದೀನಳನ್ನು ಕರೆದುಕೊಂಡು ಹೊರಟುಹೋದರು.27ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.28ಅವರ ಕುರಿಗಳನ್ನು, ದನಗಳನ್ನು ಹಾಗೂ ಕತ್ತೆಗಳನ್ನು ಊರಿನಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.29ಅವರ ಮಕ್ಕಳನ್ನೂ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದ್ದುದ್ದೆಲ್ಲವನ್ನು ಕೊಳ್ಳೆ ಹೊಡೆದರು.30ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, <<ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು>> ಎಂದನು.31ಅದಕ್ಕೆ ಅವರು, <<ನಮ್ಮ ತಂಗಿಯನ್ನು ವೇಶ್ಯೆಯಂತೆ ಉಪಯೋಗಿಸಿಕೊಂಡಿದ್ದು ಸರಿಯೇ>> ಎಂದು ಕೇಳಿದರು.
35ಯಾಕೋಬನು ಬೇತೇಲಿಗೆ ಬಂದದ್ದು
1ದೇವರು ಯಾಕೋಬನಿಗೆ, <<ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು>> ಎಂದು ಹೇಳಿದನು.2ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ <<ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,3ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ>> ಎಂದು ಹೇಳಿದನು.4ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯ ದೇವರುಗಳನ್ನು, ತಮ್ಮ ಕಿವಿಯಲ್ಲಿದ್ದ ಓಲೆಗಳನ್ನು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾ ಮರದ ಕೆಳಗೆ ಹೂಣಿಟ್ಟನು.5ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.6ಹೀಗೆ ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದರು.7ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.8ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.ದೇವರು ಯಾಕೋಬನಿಗೆ ಮಾಡಿದ ವಾಗ್ದಾನ
9ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಪುನಃ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.10ದೇವರು ಅವನಿಗೆ, <<ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ <ಇಸ್ರಾಯೇಲ್> ಎಂದು ಕರೆಯಿಸಿಕೊಳ್ಳುವೆ>> ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.11ದೇವರು ಅವನಿಗೆ, <<ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.12ನಾನು ಅಬ್ರಹಾಮ ಮತ್ತು ಇಸಾಕರಿಗೆ ವಾಗ್ದಾನ ಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಯವರಿಗೂ ಕೊಡುವೆನು>> ಎಂದು ಹೇಳಿದನು.13ಅನಂತರ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಮೇಲಕ್ಕೇರಿ ಹೋದನು.14ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು.15ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳಕ್ಕೆ <<ಬೇತೇಲ್>> ಎಂದು ಹೆಸರಿಟ್ಟನು.ಬೆನ್ಯಾಮೀನ ಜನನ, ರಾಹೇಲಳ ಮರಣ
16ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.17ಆಕೆಯು ಹೆರಿಗೆಯ ನೋವಿನಿಂದ ಬಹು ಕಷ್ಟಪಡುತ್ತಿರುವಾಗ ಸೂಲಗಿತ್ತಿಯು ಆಕೆಗೆ, <<ಅಂಜಬೇಡ ಇನ್ನೊಂದು ಗಂಡು ಮಗುವು ಹುಟ್ಟುವುದು>> ಎಂದು ಹೇಳಿದಳು.18ಆದರೆ ರಾಹೇಲಳು ಸತ್ತುಹೋದಳು. ಪ್ರಾಣಬಿಡುವಾಗ ಆಕೆಯು ಆ ಮಗುವಿಗೆ, << ಬೆನೋನಿ>> ಎಂದು ಹೆಸರಿಟ್ಟಳು. ಆದರೆ ಅದರ ತಂದೆಯು ಅದಕ್ಕೆ, << ಬೆನ್ಯಾಮೀನ>> ಎಂದು ಹೆಸರಿಟ್ಟನು.19ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.20ಯಾಕೋಬನು ಆಕೆಯ ಸಮಾಧಿಯ ಮೇಲೆ ಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ <<ರಾಹೇಲಳ ಸಮಾಧಿಯ ಸ್ತಂಭ>> ಎಂದೇ ಎನಿಸಿಕೊಂಡಿದೆ.21ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ಮಿಗ್ದಲ್ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು.
(1 ಪೂರ್ವ. 2:1-2)
22ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.23ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.24ರಾಹೇಲಳಲ್ಲಿ ಹುಟ್ಟಿದವರು: ಯೋಸೇಫನು ಮತ್ತು ಬೆನ್ಯಾಮೀನನು.25ರಾಹೇಲಳ ದಾಸಿಯಾದ ಬಿಲ್ಹಳಲ್ಲಿ ಹುಟ್ಟಿದವರು: ದಾನ್, ನಫ್ತಾಲಿ.26ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.ಇಸಾಕನ ಮರಣ
27ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.28ಇಸಾಕನು ದಿನತುಂಬಿದ ಮುದುಕನಾಗಿದ್ದು ನೂರ ಎಂಭತ್ತನೆಯ ವರ್ಷದಲ್ಲಿ ಪ್ರಾಣಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.29ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು.
36ಏಸಾವನ ವಂಶಸ್ಥರು
(1 ಪೂರ್ವ. 2:34-37)
1ಎದೋಮ್ ಎಂಬ ಏಸಾವನ ವಂಶಾವಳಿ ಇದು:2ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡನು. ಅವರು ಯಾರೆಂದರೆ, ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬಿಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು,3ಮತ್ತು ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದನು.4ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.5ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನೂ, ಕೋರಹನನ್ನು ಹೆತ್ತಳು. ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ.6ತರುವಾಯ ಏಸಾವನು ತನ್ನ ಹೆಂಡತಿಯರನ್ನೂ, ಗಂಡುಹೆಣ್ಣು ಮಕ್ಕಳನ್ನೂ, ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ, ತನಗಿದ್ದ ಎಲ್ಲಾ ಪಶುಪ್ರಾಣಿಗಳ ಹಿಂಡುಗಳನ್ನೂ ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಬೇರೆ ದೇಶಕ್ಕೆ ಹೊರಟುಹೋದನು.7ಅವರ ಸಂಪತ್ತು ಹೆಚ್ಚಿದ್ದದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.8ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು.9ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ:10ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು.11ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನೆಜ್,12ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು.13ರೆಗೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮಿಜ್ಜಾ ಇವರು ಏಸಾವನ ಹೆಂಡತಿಯಾದ ಬಾಸೆಮತಳ ಪುತ್ರರು.14ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು.15ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,16ಕೋರಹ, ಗತಾಮ್, ಅಮಾಲೇಕ್, ಇವರೇ, ಈ ಕುಲಪತಿಗಳು ಎದೋಮ್ಯರ ದೇಶದಲ್ಲಿದ್ದ ಎಲೀಫಜನಿಂದ ಬಂದವರು. ಇವರು ಆದಾಳ ಮೊಮ್ಮಕ್ಕಳು.17ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು.18ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು.19ಎದೋಮನೆನ್ನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ಮುಖಂಡರು.ಸೇಯೀರನ ವಂಶಸ್ಥರು
(1 ಪೂರ್ವ. 1:38-42)
20ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರಿನಿಂದ ಹುಟ್ಟಿದವರು. ಅವರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,21ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ಯರ ದೇಶದಲ್ಲಿ ಸೇಯೀರನ ಸಂತತಿಯವರಾದ ಹೋರಿಯಲ್ಲಿ ಹುಟ್ಟಿದ ಮುಖಂಡರು.22ಲೋಟಾನನ ಮಕ್ಕಳು: ಹೋರಿ, ಹೇಮಾಮ್, ಲೋಟಾನನ ತಂಗಿ ತಿಮ್ನಾ.23ಶೋಬಾಲನ ಮಕ್ಕಳು: ಅಲ್ವಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್.24ಸಿಬೆಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಈ ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡವನು.25ಅನಾಹನ ಮಕ್ಕಳು: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.26ದೀಶೋನನ ಮಕ್ಕಳು: ಹೆಮ್ದಾನ್, ಎಷ್ಬಾನ್, ಇತ್ರಾನ್, ಕೆರಾನ್.27ಏಚೆರನ ಮಕ್ಕಳು: ಬಿಲ್ಹಾನ್, ಜಾವಾನ್, ಅಕಾನ್.28ದೀಶಾನನ ಮಕ್ಕಳು: ಊಚ್ ಮತ್ತು ಅರಾನ್.29ಹೋರಿಯರಿಂದ ಹುಟ್ಟಿದ ಮುಖಂಡರು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ30ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಅಧಿಪತ್ಯ ನಡಿಸಿದ ಮುಖಂಡರು.ಎದೋಮ್ಯರ ಅರಸುಗಳು
(1 ಪೂರ್ವ. 1:43-54)
31ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ:32ಬೆಯೋರನ ಮಗನಾದ ಬೆಲಗನು ಎದೋಮ್ಯರನ್ನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ.33ಬೆಲಗನು ಸತ್ತ ನಂತರ ಬೊಚ್ರದವನಾದ ಜೆರಹನ ಮಗನಾಗಿದ್ದ ಯೋಬಾಬನು ಅಧಿಪತ್ಯಕ್ಕೆ ಬಂದನು.34ಯೋಬಾಬನು ಸತ್ತ ನಂತರ ತೇಮಾನೀಯರ ಹುಷಾಮನು ಅವನಿಗೆ ಬದಲಾಗಿ ಆಳಿದನು.35ಹುಷಾಮನು ಸತ್ತ ನಂತರ ಮೋವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.36ಹದದನು ಸತ್ತ ನಂತರ ಮಸ್ರೇಕದವನಾದ ಸಮ್ಲಾಹನು ಪಟ್ಟಕ್ಕೆ ಬಂದನು.37ಸಮ್ಲಾಹನು ಸತ್ತ ಮೇಲೆ ನದಿ ತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು.38ಸೌಲನು ಸತ್ತ ನಂತರ ಅಕ್ಬೋರನ ಮಗನಾದ ಬಾಳ್ಹಾನಾನನು ಅರಸನಾದನು.39ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.40ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ,41ಒಹೋಲಿಬಾಮ, ಏಲಾ, ಪೀನೋನ್,42ಕೆನೆಜ್, ತೇಮಾನ್, ಮಿಪ್ಚಾರ್43ಮಗ್ದೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಈ ಎದೋಮ್ಯರ ಮೂಲ ಪುರುಷನೇ ಏಸಾವನು.
37ಯೋಸೇಫನ ಕನಸು
1ಯಾಕೋಬನು ತನ್ನ ತಂದೆಯು ಪ್ರವಾಸವಾಗಿದ್ದ ಕಾನಾನ್ ದೇಶದಲ್ಲಿ ವಾಸವಾಗಿದ್ದನು.2ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.3ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು.4ಅವನ ಅಣ್ಣತಮ್ಮಂದಿರು, ತಮ್ಮ ತಂದೆಯು ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು.5ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.6ಅವನು ಅವರಿಗೆ, <<ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ, ದಯವಿಟ್ಟು ಕೇಳಿರಿ.7ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು>> ಎಂದು ಹೇಳಿದನು.8ಅದಕ್ಕೆ ಅವನ ಅಣ್ಣಂದಿರು ಅವನಿಗೆ, <<ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?>> ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.9ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, <<ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು>> ಎಂದು ಹೇಳಿದನು.10ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, <<ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದೆವೋ?>> ಎಂದು ಹೇಳಿ ಗದರಿಸಿದನು.11ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.ಯೋಸೇಫನನ್ನು ಮಾರಿದ್ದು
12ಅವನ ಅಣ್ಣಂದಿರು ತಂದೆಯ ಆಡುಕುರಿ ಹಿಂಡುಗಳನ್ನು ಮೇಯಿಸುವುದಕ್ಕೆ ಶೆಕೆಮಿಗೆ ಹೋದರು.13ಇಸ್ರಾಯೇಲನು ಯೋಸೇಫನಿಗೆ, <<ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು>> ಎಂದು ಹೇಳಿದನು. ಅದಕ್ಕೆ ಅವನು, <<ಆಗಲಿ, ಹೋಗುತ್ತೇನೆ>> ಎಂದನು.14ಇಸ್ರಾಯೇಲ್ಯನು ಅವನಿಗೆ, <<ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ>> ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.15ಅವನು ಶೆಕೆಮಿಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು, <<ಏನು ಹುಡುಕುತ್ತೀ?>> ಎಂದು ವಿಚಾರಿಸಿದನು.16ಅದಕ್ಕೆ ಅವನು, <<ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ. ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಾರೆ ದಯವಿಟ್ಟು ಹೇಳು>> ಎಂದನು.17ಅದಕ್ಕೆ ಆ ಮನುಷ್ಯನು, <<ಅವರು ಇಲ್ಲಿಂದ ಹೊರಟುಹೋದರು. ಅವರು ನಾವು ದೋತಾನಿಗೆ ಹೋಗೋಣ ಎಂಬುದಾಗಿ ಮಾತನಾಡುವುದನ್ನು ನಾನು ಕೇಳಿಸಿಕೊಂಡೆನು>> ಎಂದು ಹೇಳಲು ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.18ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವುದಕ್ಕೆ ಒಳಸಂಚು ಮಾಡಿಕೊಂಡರು.19ಅವರು ಒಬ್ಬರಿಗೊಬ್ಬರು, <<ಅಗೋ ಆ ಕನಸುಗಾರನು ಬರುತ್ತಿದ್ದಾನೆ ನೋಡಿರಿ20ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ>> ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.21ರೂಬೇನನು ಈ ಮಾತನ್ನು ಕೇಳಿ, <<ನಾವು ಅವನ ಪ್ರಾಣವನ್ನು ತೆಗೆಯಬಾರದು>> ಎಂದು ಹೇಳಿದನು.22ರೂಬೇನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರುಗಿ ಒಪ್ಪಿಸಬೇಕೆಂದು ನೆನಸಿ ಅವರಿಗೆ, <<ಇವನ ರಕ್ತ ಸುರಿಸಬೇಡಿರಿ, ಅವನನ್ನು ಈ ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಿರಿ, ಅವನ ಮೇಲೆ ಕೈಹಾಕಬೇಡಿರಿ>> ಎಂದು ಹೇಳಿದನು.23ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದರು.24ಅವನನ್ನು ಹಿಡಿದು ಆ ಗುಂಡಿಯೊಳಗೆ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.25ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.26ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, <<ನಾವು ನಮ್ಮ ತಮ್ಮನನ್ನು ಕೊಂದು ಹಾಕಿ ಅವನ ರಕ್ತವನ್ನು ಮರೆಮಾಡಿದರೆ ಲಾಭವೇನು?27ಬನ್ನಿರಿ, ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ. ನಾವು ಅವನ ಮೇಲೆ ಕೈಹಾಕಬಾರದು. ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ>> ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.28ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.29ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.30ಅವನು ತನ್ನ ತಮ್ಮಂದಿರ ಬಳಿಗೆ ಬಂದು, <<ಅಯ್ಯೋ, ಹುಡುಗನು ಇಲ್ಲವಲ್ಲಾ, ನಾನೆಲ್ಲಿಗೆ ಹೋಗಲಿ?>> ಎಂದು ಗೋಳಾಡಿದನು.31ಆ ಮೇಲೆ ಅವರು ಒಂದು ಹೋತವನ್ನು ಕೊಯ್ದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ,32ಆ ಬಣ್ಣದ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತಂದು, <<ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ದಯವಿಟ್ಟು ನೋಡು>> ಎಂದು ಅವನಿಗೆ ಹೇಳಿದರು.33ಯಾಕೋಬನು ಅದರ ಗುರುತು ಹಿಡಿದು, <<ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು>> ಎಂದು ಹೇಳಿದನು.34ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.35ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, <<ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು>> ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.36ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.
38ಯೆಹೂದನು ಮತ್ತು ತಾಮಾರಳು
1ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮಿನ ಊರಿನವನಾದ ಹೀರಾ ಎಂಬುವವನ ಹತ್ತಿರ ಉಳಿದುಕೊಂಡನು.2ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ಕಂಡು ಅವಳನ್ನು ಮದುವೆ ಮಾಡಿಕೊಂಡನು3ಅವಳು ಬಸುರಾಗಿ ಗಂಡುಮಗುವನ್ನು ಹೆತ್ತಳು ಅದಕ್ಕೆ ಯೆಹೂದನು <<ಏರ್>> ಎಂದು ಹೆಸರಿಟ್ಟನು.4ಅವಳು ಎರಡನೆಯ ಸಾರಿ ಬಸುರಾಗಿ ಗಂಡು ಮಗುವನ್ನು ಹೆತ್ತಾಗ ಅದಕ್ಕೆ <<ಓನಾನ್>> ಎಂದು ಹೆಸರಿಟ್ಟಳು.5ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ <<ಶೇಲಹ>> ಎಂದು ಹೆಸರಿಟ್ಟಳು. ಅವಳು ಆ ಮಗುವನ್ನು ಹೆತ್ತಾಗ ಯೆಹೂದನು ಕಜೀಬೂರಿನಲ್ಲಿದ್ದನು.6ಯೆಹೂದನು ತನ್ನ ಚೊಚ್ಚಲು ಮಗನಾದ ಏರನಿಗೆ <<ತಾಮಾರ್>> ಎಂಬ ಹೆಣ್ಣನ್ನು ತಂದು ಮದುವೆ ಮಾಡಿಸಿದನು.7ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು.8ಬಳಿಕ ಯೆಹೂದನು ಓನಾನನಿಗೆ, <<ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು>> ಎಂದನು.9ಆದರೆ ಓನಾನನು ಈ ರೀತಿ ಆಗುವ ಸಂತಾನವು ತನ್ನದಾಗುವುದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಬಾರದೆಂದು ಯೋಚಿಸಿ ತನ್ನ ಅತ್ತಿಗೆಯೊಂದಿಗೆ ಸಂಗಮಿಸುವಾಗೆಲ್ಲಾ ಅವಳು ಗರ್ಭಧರಿಸದಂತೆ ತನ್ನ ವೀರ್ಯವನ್ನು ನೆಲದ ಮೇಲೆ ಸುರಿಸುತಿದ್ದನು.10ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು.11ಆ ಮೇಲೆ ಯೆಹೂದನು ಒಂದು ವೇಳೆ ಶೇಲಹನು ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ, <<ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿರು>> ಎಂದು ಹೇಳಿದನು. ಅವಳು ತಂದೆಯ ಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.12ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು.13ಆಗ ತಾಮಾರಳಿಗೆ, <<ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕೋಸ್ಕರ ತಿಮ್ನಾ ಊರಿಗೆ ಹೋಗುತ್ತಿದ್ದಾನೆ>> ಎಂದು ತಿಳಿದು ಬಂದಿತು14ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು.15ಯೆಹೂದನು ಆಕೆಯನ್ನು ಕಂಡಾಗ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ವೇಶ್ಯಾಸ್ತ್ರೀಯೆಂದು ಭಾವಿಸಿದನು.16ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ, <<ನಾನು ನಿನ್ನ ಬಳಿಗೆ ಬರಲೇ ಎಂದು ಕೇಳಿದನು>> ಆಕೆ, <<ನೀನು ನನ್ನಲ್ಲಿ ಬರಬೇಕಾದರೆ, ನನಗೆ ಏನು ಕೊಡುತ್ತೀ?>> ಎಂದು ಕೇಳಿದಳು.17ಅವನು, <<ಹಿಂಡಿನಿಂದ ಒಂದು ಹೋತಮರಿಯನ್ನು ಕಳುಹಿಸುತ್ತೇನೆ>> ಅಂದಾಗ ಆಕೆ, <<ನೀನು ಆದನ್ನು ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು>> ಎಂದು ಹೇಳಿದ್ದಕ್ಕೆ,18ಅವನು, <<ಏನು ಒತ್ತೇ ಇಡಲಿ>> ಎಂದು ಕೇಳಿದನು. ಆಗ ಆಕೆಯು <<ನಿನ್ನ ಮುದ್ರೆ, ನಿನ್ನ ದಾರ, ನಿನ್ನ ಕೈಕೋಲು ಈ ಮೂರನ್ನು ಒತ್ತೆಯಾಗಿ ಇಡು>> ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಗಮಿಸಲು ಆಕೆಯು ಅವನಿಗೆ ಗರ್ಭಿಣಿಯಾದಳು.19ತರುವಾಯ ಆಕೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರುಗಿ ವಿಧವೆಯ ವಸ್ತ್ರಗಳನ್ನು ಉಟ್ಟುಕೊಂಡಳು.20ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನ ಕೈಯಿಂದ ಬಿಡಿಸಿಕೊಳ್ಳುವುದಕ್ಕೊಸ್ಕರ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಲ್ಲಿ ಹೋತಮರಿಯನ್ನು ಕಳುಹಿಸಿದಾಗ ಆಕೆಯು ಅವನಿಗೆ ಸಿಗಲಿಲ್ಲ.21ಅವನು ಅವಳ ಊರಿನವರನ್ನು, <<ಏನಯಿಮಿನ ದಾರಿಯ ಬಳಿಯಲ್ಲಿ ಕುಳಿತಿದ್ದ ವೇಶ್ಯಾಸ್ತ್ರೀ ಎಲ್ಲಿರುವಳು>> ಎಂದು ಕೇಳಿದ್ದಕ್ಕೆ ಅವರು, <<ಇಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲ>> ಎಂದರು.22ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, <<ನಾನು ಅವಳನ್ನು ಕಾಣಲಿಲ್ಲ ಮತ್ತು ಅಲ್ಲಿ ವಿಚಾರಿಸಿದಾಗ ಆ ಊರಿನವರು ಅಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲವೆಂದರು>> ಎಂದು ತಿಳಿಸಿದನು.23ಅದಕ್ಕೆ ಯೆಹೂದನು, <<ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಆ ವಸ್ತುಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ>> ಎಂದನು.24ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, <<ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ>> ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, <<ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು>> ಎಂದು ಹೇಳಿದನು.25ಆಕೆಯನ್ನು ಹೊರಕ್ಕೆ ತಂದಾಗ, ಆಕೆಯು ತನ್ನ ಮಾವನಿಗೆ, <<ಈ ಸಾಮಾನುಗಳನ್ನು ಕಳುಹಿಸಿ, ಇವು ಯಾವ ಮನುಷ್ಯನದೋ, ಅವನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು>> ಎಂದು ಕೇಳಿಕೊಂಡಳು.26ಯೆಹೂದನು ಅವುಗಳ ಗುರುತನ್ನು ತಿಳಿದು, <<ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು>> ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ.27ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿರುವುದು ಕಂಡುಬಂದಿತು.28ಆಕೆಯು ಹೆರುವಾಗ ಒಂದು ಮಗುವು ಮುಂದಕ್ಕೆ ಕೈಚಾಚಲು ಸೂಲಗಿತ್ತಿಯು, <<ಇದು ಮೊದಲು ಹೊರಗೆ ಬಂದದ್ದು>> ಎಂದು ಹೇಳಿ ಅದರ ಕೈಗೆ ಕೆಂಪು ದಾರವನ್ನು ಕಟ್ಟಿದಳು.29ಅದು ಕೈಯನ್ನು ಹಿಂದಕ್ಕೆ ತೆಗೆಯಲು, ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂದಿತು. ಸೂಲಗಿತ್ತಿಯು ಇದನ್ನು ಕಂಡು, <<ನೀನು ಛೇದಿಸಿಕೊಂಡು ಬಂದೆಯಾ?>> ಎಂದು ಹೇಳಿ, ಅದಕ್ಕೆ << ಪೆರೆಚ್>> ಎಂದು ಹೆಸರಾಯಿತು.30ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹೊರಗೆ ಬಂದಿತು. ಅದಕ್ಕೆ << ಜೆರಹ>> ಎಂದು ಹೆಸರಾಯಿತು.
39ಯೋಸೇಫನು ಮತ್ತು ಪೋಟೀಫರನ ಹೆಂಡತಿ
1ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು.2ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.3ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.4ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.5ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.6ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು. ಇವನು ತನ್ನ ಬಳಿಯಲ್ಲೇ ಇದ್ದುದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವ ವಿಷಯದಲ್ಲೂ ಚಿಂತಿಸುತ್ತಿರಲಿಲ್ಲ. ಯೋಸೇಫನು ರೂಪವಂತನೂ, ಸುಂದರನೂ ಆಗಿದ್ದನು.7ಹೀಗಿರುವಲ್ಲಿ ಯೋಸೇಫನ ದಣಿಯ ಹೆಂಡತಿಯು ಅವನನ್ನು ಮೋಹಿಸಿ <<ನನ್ನ ಸಂಗಡ ಸಂಗಮಿಸಲು ಬಾ>> ಎಂದಳು.8ಆದರೆ ಅವನು ಒಪ್ಪದೆ, <<ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.9ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?>> ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.10ಅವಳು ಯೋಸೇಫನ ಸಂಗಡ ಪ್ರತಿದಿನವೂ ಈ ಮಾತನ್ನು ಆಡಿದ್ದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯನ್ನು ಮೋಹಿಸುವುದಕ್ಕಾಗಲಿ, ಆಕೆಯ ಬಳಿಯಲ್ಲಿರುವುದಕ್ಕಾಗಲೀ ಒಪ್ಪಿಕೊಳ್ಳಲೇ ಇಲ್ಲ.11ಹೀಗಿರಲು ಒಂದು ದಿನ ಅವನು ತನ್ನ ಕೆಲಸದ ಮೇಲೆ ಮನೆಗೆ ಬಂದಾಗ ಮನೆಯೊಳಗೆ ಯಾವ ಸೇವಕರೂ ಇರಲಿಲ್ಲ.12ಆಕೆ ಅವನ ಬಟ್ಟೆಯನ್ನು ಹಿಡಿದುಕೊಂಡು, <<ನನ್ನೊಂದಿಗೆ ಸಂಗಮಿಸಲು ಬಾ>> ಎಂದು ಕರೆಯಲು, ಅವನು ತನ್ನ ಬಟ್ಟೆಯನ್ನು ಆಕೆಯ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಹೊರಗೆ ಓಡಿಹೋದನು.13ಅವನು ತನ್ನ ಬಟ್ಟೆಯನ್ನು ಅವಳ ಕೈಯಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದದ್ದನ್ನು ಆಕೆಯು ನೋಡಿ,14ಮನೆಯ ಸೇವಕರನ್ನು ಕರೆದು ಅವರಿಗೆ, <<ನೋಡಿರಿ, ನನ್ನ ಯಜಮಾನನು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾನೆ. ಅವನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.15ನಾನು ಕೂಗುವುದನ್ನು ಕೇಳಿ ಅವನು ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು>> ಎಂದಳು.16ತನ್ನ ಯಜಮಾನನು ಮನೆಗೆ ಬರುವ ತನಕ ಆಕೆಯು ಆ ಬಟ್ಟೆಯನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಿದ್ದಳು.17ಯಜಮಾನನು ಬಂದಾಗ ಆಕೆಯು ಅದೇ ಮಾತನ್ನು ಹೇಳಿ ಅವನಿಗೆ, <<ನೀನು ನಮ್ಮಲ್ಲಿ ಸೇರಿಸಿಕೊಂಡ ಆ ಇಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಬಳಿಗೆ ಬಂದನು.18ನಾನು ಜೋರಾಗಿ ಕೂಗಿಕೊಂಡಾಗ ಅವನು ತನ್ನ ಬಟ್ಟೆಯನ್ನು ಬಿಟ್ಟು ತಪ್ಪಿಸಿಕೊಂಡು ಓಡಿಹೋದನು>> ಎಂದು ಹೇಳಿದಳು.19ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬುದಾಗಿ ತನ್ನ ಹೆಂಡತಿ ಹೇಳಿದ ಮಾತುಗಳನ್ನು ಯೋಸೇಫನ ದಣಿಯು ಕೇಳಿದಾಗ ಬಹಳ ಸಿಟ್ಟುಗೊಂಡನು.20ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.21ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.22ಸೆರೆಮನೆಯ ಯಜಮಾನನು ಸೆರೆಯಲ್ಲಿದ್ದವರೆಲ್ಲರನ್ನೂ ಯೋಸೇಫನ ವಶಕ್ಕೆ ಒಪ್ಪಿಸಿ ಅವನನ್ನು ಮೇಲ್ವಿಚಾರಕನನ್ನಾಗಿ ಮಾಡಿದನು. ಅವರು ಮಾಡಬೇಕಾದ ಎಲ್ಲ ಕೆಲಸವನ್ನು ಯೋಸೇಫನೇ ಮಾಡಿಸುತ್ತಿದ್ದನು.23ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಸಫಲಗೊಳಿಸಿದ್ದರಿಂದ ಅವನ ವಶಕ್ಕೆ ಒಪ್ಪಿಸಿದ್ದ ಯಾವ ವಿಷಯದ ಕುರಿತಾಗಿಯೂ ಸೆರೆಮನೆಯ ಯಜಮಾನನು ಯೋಚಿಸದೆ ನಿಶ್ಚಿಂತನಾಗಿದ್ದನು.
40ಯೋಸೇಫನು ಕನಸುಗಳ ಅರ್ಥವನ್ನು ತಿಳಿಸಿದ್ದು
1ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು.2ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಿಸಿಕೊಂಡು,3ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿರಿಸಿದನು. ಅದು ಯೋಸೇಫನು ಬಂಧಿಯಾಗಿದ್ದ ಸೆರೆಮನೆಯಾಗಿತ್ತು4ಸೆರೆಮನೆಯ ಅಧಿಪತಿಯು ಯೋಸೇಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದರಿಂದ ಯೋಸೇಫನು ಅವರಿಗೆ ಸೇವೆ ಮಾಡುವವನಾದನು. ಹೀಗೆ ಅವರು ಕೆಲವು ಕಾಲ ಸೆರೆಯಲ್ಲಿದ್ದರು.5ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.6ಬೆಳಿಗ್ಗೆ ಯೋಸೇಫನು ಅವರ ಬಳಿಗೆ ಬಂದಾಗ ಅವರು ಬಹು ಚಿಂತೆಯುಳ್ಳವರಾಗಿ ಕಾಣಿಸಿದರು.7ಅದನ್ನು ಅವನು ನೋಡಿ, <<ನಿಮ್ಮ ಮುಖವು ಈ ಹೊತ್ತು ಏಕೆ ಕಳೆಗುಂದಿದೆ?>> ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು.8ಅವರು ಅವನಿಗೆ, <<ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ>> ಎಂದು ಹೇಳಲು ಯೋಸೇಫನು ಅವರಿಗೆ, <<ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ>> ಎಂದು ಹೇಳಿದನು.9ಆಗ ಪಾನದಾಯಕರಲ್ಲಿ ಮುಖ್ಯಸ್ಥನು ಯೋಸೇಫನಿಗೆ, <<ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆಯನ್ನು ನನ್ನ ಮುಂದೆ ಕಂಡೆನು.10ಅದಕ್ಕೆ ಮೂರು ದ್ರಾಕ್ಷಾಲತೆಯ ಕೊಂಬೆಗಳಿದ್ದವು. ಅದು ಚಿಗುರುತ್ತಲೇ ಹೂವುಗಳನ್ನು ಬಿಟ್ಟಿತು; ಆ ಹೂವುಗಳು ಗೊಂಚಲುಗಳಾಗಿ ಹಣ್ಣಾದವು.11ಫರೋಹನ ಪಾನಪಾತ್ರೆಯು ನನ್ನ ಕೈಯಲ್ಲಿದ್ದದರಿಂದ ನಾನು ಆ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದು ಪಾತ್ರೆಯಲ್ಲಿ ಹಿಂಡಿ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆನು>> ಎಂದು ಹೇಳಿದನು.12ಅದಕ್ಕೆ ಯೋಸೇಫನು, <<ಆ ಕನಸಿನ ಅರ್ಥವೇನೆಂದರೆ, ಆ ಮೂರು ದ್ರಾಕ್ಷಾಲತೆಯ ಕೊಂಬೆಗಳೇ ಮೂರು ದಿನಗಳು.13ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.14ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ದಯೆ ತೋರಿಸಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.15ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು>> ಅಂದನು.16ಅವನು ಹೇಳಿದ ಅರ್ಥವು ಶುಭಕರವಾದದ್ದೆಂದು ಅಡಿಗೆಭಟ್ಟರಲ್ಲಿ ಮುಖ್ಯಸ್ಥನು ತಿಳಿದು ಯೋಸೇಫನಿಗೆ, ನಾನೂ ಕಂಡ ಕನಸನ್ನು ಹೇಳುತ್ತೇನೆ ಕೇಳು, <<ನನಗೆ ಬಿದ್ದ ಕನಸಿನಲ್ಲಿ ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲಿದ್ದವು.17ಮೇಲಿನ ಪುಟ್ಟಿಯಲ್ಲಿ ಫರೋಹನಿಗೋಸ್ಕರ ಎಲ್ಲಾ ವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿಂದುಹಾಕಿದವು>> ಎಂದು ಹೇಳಿದನು.18ಅದಕ್ಕೆ ಯೋಸೇಫನು, <<ನಿನ್ನ ಕನಸಿನ ಅರ್ಥವೇನೆಂದರೆ, ಆ ಮೂರು ಪುಟ್ಟಿಗಳೇ ಮೂರು ದಿನಗಳು.19ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು>> ಎಂದನು.20ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.21ಪಾನದಾಯಕರ ಮುಖ್ಯಸ್ಥನನ್ನು ಪುನಃ ಅವನ ಉದ್ಯೋಗಕ್ಕೆ ನೇಮಿಸಿದನು. ಅವನು ಪಾನ ಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.22ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು.23ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
41ಫರೋಹನ ಕನಸುಗಳು
1ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.2ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನೈಲ್ ನದಿಯೊಳಗಿಂದ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.3ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು.4ಅವಲಕ್ಷಣವಾದ ಈ ಬಡ ಏಳು ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು.5ಅವನು ಮತ್ತೆ ನಿದ್ರೆಮಾಡಿದಾಗ ಮತ್ತೊಂದು ಕನಸು ಬಿತ್ತು. ಅದೇನೆಂದರೆ, ಒಳ್ಳೆಯ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.6ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.7ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚೆತ್ತು, ಅದನ್ನು ಕನಸೆಂದು ತಿಳಿದುಕೊಂಡನು.8ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.9ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, <<ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ.10ಫರೋಹನು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ, ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನನ್ನೂ ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿ ಇಟ್ಟಾಗ,11ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.12ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು. ಅವನು ಮೈಗಾವಲಿನವರ ಅಧಿಪತಿಯ ಸೇವಕನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ತಿಳಿಸಿದನು. ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.13ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು. ಅವನು ಹೇಳಿದಂತೆಯೇ ನನ್ನ ಉದ್ಯೋಗವು ಪುನಃ ನನಗೆ ದೊರಕಿತು. ಅಡಿಗೆ ಭಟ್ಟರ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು>> ಎಂದನು.14ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.15ಆಗ ಫರೋಹನು ಯೋಸೇಫನಿಗೆ, <<ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ>> ಎಂದು ಹೇಳಿದನು.16ಅದಕ್ಕೆ ಯೋಸೇಫನು, <<ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು>> ಎಂದು ಹೇಳಿದನು.17ಆಗ ಫರೋಹನು ಯೋಸೇಫನಿಗೆ, <<ನನ್ನ ಕನಸಿನೊಳಗೆ ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.>>18ನೈಲ್ ನದಿಯೊಳಗಿಂದ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.19ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಆಕಳುಗಳು ಏರಿ ಬಂದವು. ಇಂಥ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿರಲಿಲ್ಲ.20ಅದಲ್ಲದೆ ಅವಲಕ್ಷಣವಾದ ಆ ಬಡ ಆಕಳುಗಳು ಮೊದಲು ಕಾಣಿಸಿದ ಆ ಏಳು ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು.21ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಿಬರಲಿಲ್ಲ. ಅವು ಮೊದಲಿದ್ದಂತೆ ಬಡವಾಗಿಯೇ ಇದ್ದವು. ಆಗ ನನಗೆ ಎಚ್ಚರವಾಯಿತು.22<<ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಏಳು ಒಳ್ಳೆ ಪುಷ್ಟಿಯುಳ್ಳ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿ ಬಂದವು.23ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿ ಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.24ಬತ್ತಿ ಹೋಗಿದ್ದ ತೆನೆಗಳು ಆ ಏಳು ಒಳ್ಳೆ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ವಿವರಿಸಿ ಹೇಳುವುದಕ್ಕೆ ಯಾರಿಂದಲೂ ಆಗಲಿಲ್ಲ>> ಎಂದನು.25ಯೋಸೇಫನು ಫರೋಹನಿಗೆ, <<ತಾವು ಕಂಡ ಎರಡು ಕನಸುಗಳು ಒಂದೇಯಾಗಿದೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.26ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ.27ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.28ದೇವರು ತಾನು ಮಾಡಬೇಕೆಂದಿರುವುದನ್ನು ಫರೋಹನಿಗೆ ತಿಳಿಸಿದ್ದಾನೆ ಎಂಬುದಾಗಿ ತಿಳಿಸಿದನು.29ಐಗುಪ್ತ ದೇಶದಲ್ಲೆಲ್ಲಾ ಬಹು ವಿಶೇಷವಾದ ಏಳು ಸುಭಿಕ್ಷ ವರ್ಷಗಳೂ ಬರುವವು.30ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.31ಮುಂದೆ ಬರುವ ಕ್ಷಾಮವು ಅತ್ಯಂತ ಘೋರವಾಗಿರುವುದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವುದು.32ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.33<<ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು.34ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು.35ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ.36ಆ ಆಹಾರ ಪದಾರ್ಥಗಳನ್ನು ಶೇಖರಿಸಿಕೊಳ್ಳುವುದರಿಂದ ಐಗುಪ್ತ ದೇಶದಲ್ಲಿ ಉಂಟಾಗುವ ಏಳು ವರ್ಷಗಳ ಬರಗಾಲದಲ್ಲಿ ಜನರು ಸಾಯುವುದಿಲ್ಲ>> ಎಂದು ಹೇಳಿದನು.37ಆ ಮಾತು ಫರೋಹನಿಗೂ ಅವನ ಸೇವಕರಿಗೂ ಒಳ್ಳೇದಾಗಿ ತೋರಿತು.38ಫರೋಹನು ತನ್ನ ಸೇವಕರಿಗೆ, <<ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?>> ಎಂದನು.39ಫರೋಹನು ಯೋಸೇಫನಿಗೆ, <<ದೇವರು ಇದನ್ನೆಲ್ಲಾ ನಿನಗೆ ತಿಳಿಸಿರುವುದರಿಂದ ನಿನಗೆ ಸಮಾನನಾದ ಬುದ್ಧಿ, ವಿವೇಕವುಳ್ಳ ಪುರುಷನು ಯಾರೂ ಇಲ್ಲ.40ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು>> ಎಂದು ಹೇಳಿದನು.41ಫರೋಹನು ಯೋಸೇಫನಿಗೆ, <<ನೋಡು ಐಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ>> ಎಂದು ಹೇಳಿ,42ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು.43ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, <<ಅವನ ಮುಂದೆ ಅಡ್ಡ ಬೀಳಿರಿ>> ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.44ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, <<ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು>> ಎಂದು ಹೇಳಿದನು.45ಇದಲ್ಲದೆ ಫರೋಹನು ಯೋಸೇಫನಿಗೆ <<ಸಾಫ್ನತ್ಪನ್ನೇಹ>> ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.ಏಳು ವರ್ಷ ಬರಗಾಲ
46ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.47ಸುಭಿಕ್ಷವಾದ ಏಳು ವರ್ಷಗಳಲ್ಲಿ ಭೂಮಿಯು ಹೇರಳವಾಗಿ ಫಲಕೊಟ್ಟಿತು.48ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು.49ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು.50ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು.51ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, <<ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು>> ಎಂದು ಹೇಳಿ ಅವನಿಗೆ << ಮನಸ್ಸೆ>> ಎಂದು ಹೆಸರಿಟ್ಟನು.52ಎರಡನೆಯ ಮಗನು ಹುಟ್ಟಿದಾಗ, <<ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ>> ಎಂದು ಹೇಳಿ ಆ ಮಗನಿಗೆ << ಎಫ್ರಾಯೀಮ್>> ಎಂದು ಹೆಸರಿಟ್ಟನು.53ಐಗುಪ್ತ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ54ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.55ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, <<ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ>> ಎಂದು ಹೇಳಿದನು.56ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.57ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.
42ಯೋಸೇಫನ ಸಹೋದರರು ಐಗುಪ್ತಕ್ಕೆ ಹೋದದ್ದು
1ಐಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, <<ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?>>2<<ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ>> ಎಂದು ಹೇಳಿದನು.3ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು.4ಆದರೆ ಯಾಕೋಬನು ಯೋಸೇಫನ ತಮ್ಮನಾದ ಬೆನ್ಯಾಮೀನನಿಗೆ <<ಕೇಡು ಉಂಟಾದೀತೆಂದು>> ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ.5ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು.6ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.7ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, <<ನೀವು ಎಲ್ಲಿಂದ ಬಂದವರು>> ಎಂದು ಕೇಳಿದನು. ಅವರು, <<ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ>> ಎಂದರು.8ಅಣ್ಣಂದಿರ ಗುರುತು ಯೋಸೇಫನಿಗೆ ತಿಳಿದಿದ್ದರೂ ಅವನ ಗುರುತು ಅವರಿಗೆ ತಿಳಿಯಲಿಲ್ಲ.9ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, <<ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು>> ಎಂದು ಹೇಳಿದನು.10ಅದಕ್ಕೆ ಅವರು, <<ಇಲ್ಲ ಸ್ವಾಮಿ, ತಮ್ಮ ಸೇವಕರಾದ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕಾಗಿ ಬಂದಿದ್ದೇವೆ.11ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ>> ಅಂದರು.12ಅವನು ಅವರಿಗೆ, <<ಇಲ್ಲ, ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದ್ದಿದೀರಿ>> ಎಂದು ಹೇಳಿದನು.13ಅದಕ್ಕೆ ಅವರು, <<ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ>> ಎಂದರು.14ಯೋಸೇಫನು ಅವರಿಗೆ, <<ನಾನು ಈಗಾಗಲೇ ಹೇಳಿದಂತೆ ನೀವು ಗೂಢಚಾರರೇ.15ನೀವು ಪರೀಕ್ಷಿಸಲ್ಪಡುವುದು ಹೇಗೆಂದರೆ, ನಿಮ್ಮ ಚಿಕ್ಕ ತಮ್ಮನು ಬರಬೇಕು. ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಬಾರದು.16ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ ಫರೋಹನ ಜೀವದಾಣೆ ನೀವು ಗೂಢಚಾರರೇ>> ಎಂದು ಹೇಳಿದನು.17ಅವರೆಲ್ಲರನ್ನು ಅವನು, ಮೂರು ದಿನ ಕಾವಲಿನಲ್ಲಿರಿಸಿದನು.18ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, <<ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.19ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ. ಮಿಕ್ಕವರು ನಿಮ್ಮ ಮನೆಯವರಿಗೆ ಧಾನ್ಯವನ್ನು ತೆಗೆದುಕೊಂಡು ಹೋಗಿರಿ.20ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ>> ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.21ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, <<ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ>> ಎಂದು ಮಾತನಾಡಿಕೊಂಡರು.22ಅದಕ್ಕೆ ರೂಬೇನನು, <<ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ>> ಎಂದನು.23ಯೋಸೇಫನು ದ್ವಿಭಾಷೆಯಲ್ಲಿ ಮಾತನಾಡಬಲ್ಲ ಅನುವಾದಕರೊಂದಿಗೆ ಮಾತನಾಡಿದ್ದರಿಂದ ಅವರು ತಮ್ಮ ಮಾತು ಅವನಿಗೆ ಗೊತ್ತಾಗುತ್ತದೆಂದು ತಿಳಿಯಲಿಲ್ಲ.24ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು.ಯೋಸೇಫನ ಸಹೋದರರು ಕಾನಾನ್ ದೇಶಕ್ಕೆ ಮರಳಿಬಂದದ್ದು
25ಆ ಮೇಲೆ ಯೋಸೇಫನು ತನ್ನ ಆಳುಗಳಿಗೆ ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು.26ಇವರು ತಾವು ಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟು ಹೋದರು.27ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.28ಅವನು ತನ್ನ ಅಣ್ಣತಮ್ಮಂದಿರಿಗೆ, <<ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ>> ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, <<ದೇವರು ನಮಗೆ ಹೀಗೆ ಮಾಡಿದ್ದೇನು?>> ಎಂದು ಅಂದುಕೊಂಡರು.29ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ನಡೆದ ಎಲ್ಲ ವಿಷಯವನ್ನು ತಿಳಿಸಿದರು.30ಆ ದೇಶಾಧಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು.31ನಾವು ಅವನಿಗೆ, <<ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ.32ನಾವು ಒಬ್ಬ ತಂದೆಯಿಂದಲೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ. ನಮ್ಮಲ್ಲಿ ಒಬ್ಬನಿಲ್ಲ. ಚಿಕ್ಕವನು ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದಾನೆ>> ಎಂದು ಹೇಳಿದೆವು.33ಅದಕ್ಕೆ <<ದೇಶಾಧಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ,34ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ ನೀವು ಗೂಢಚಾರರಲ್ಲ ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಸೆರೆಯಿಂದ ಬಿಡಿಸುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ಮಾಡಬಹುದು>> ಎಂದು ಹೇಳಿದನು ಎಂದರು.35ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.36ಆಗ ಅವರ ತಂದೆಯಾದ ಯಾಕೋಬನು, <<ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ>> ಎಂದು ಹೇಳಿದನು.37ರೂಬೇನನು ತನ್ನ ತಂದೆಗೆ, <<ನಾನು ಈ ಹುಡುಗನನ್ನು ತಿರುಗಿ ತಂದು ಒಪ್ಪಿಸದೆ ಹೋದರೆ ನನ್ನ ಇಬ್ಬರು ಗಂಡುಮಕ್ಕಳನ್ನು ಕೊಂದು ಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತೇನೆ>> ಎಂದು ಹೇಳಿದನು.38ಆದರೆ ಯಾಕೋಬನು ಅವರಿಗೆ, <<ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ>> ಎಂದು ಹೇಳಿದನು.
43ಯೋಸೇಫನ ಸಹೋದರರು ಎರಡನೆಯ ಸಾರಿ ಐಗುಪ್ತಕ್ಕೆ ಹೋದದ್ದು
1ಕಾನಾನ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.2ಅವರು ಐಗುಪ್ತ ದೇಶದಿಂದ ತಂದಿದ್ದ ದವಸಧಾನ್ಯವು ಮುಗಿದ ನಂತರ ಅವರ ತಂದೆಯು ಅವರಿಗೆ, <<ನೀವು ಪುನಃ ಹೋಗಿ ಇನ್ನೂ ಸ್ವಲ್ಪ ಧಾನ್ಯವನ್ನು ಖರೀದಿಸಿಕೊಂಡು ಬನ್ನಿರಿ>> ಎಂದನು.3ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, <<ಆ ಮನುಷ್ಯನು ನಮಗೆ <ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು> ಎಂದು ಖಂಡಿತವಾಗಿ>> ಹೇಳಿದ್ದಾನೆ.4ನೀನು ನಮ್ಮ ತಮ್ಮನನ್ನು ನಮ್ಮ ಜೊತೆಯಲ್ಲಿ ಕಳುಹಿಸಿದರೆ ನಾವು ಹೋಗಿ, ನಿನಗೆ ಧಾನ್ಯವನ್ನು ಖರೀದಿಸಿಕೊಂಡು ತರುತ್ತೇವೆ.5ಅವನನ್ನು ನೀನು ಕಳುಹಿಸದೆ ಹೋದರೆ ನಾವು ಹೋಗುವುದಿಲ್ಲ. ಏಕೆಂದರೆ ಆ <<ಮನುಷ್ಯನು ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು>> ಎಂದು ಹೇಳಿದ್ದಾನೆ.6ಅದಕ್ಕೆ ಇಸ್ರಾಯೇಲನು, <<ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ, ನೀವು ಯಾಕೆ ನನಗೆ ಕೇಡು ಮಾಡಿದಿರಿ?>> ಎಂದು ಹೇಳಿದನು.7ಅವರು, <<ನಮ್ಮ ವಿಷಯದಲ್ಲಿಯೂ ನಮ್ಮ ಮನೆಯವರ ವಿಷಯದಲ್ಲಿಯೂ ಆ ಮನುಷ್ಯನು ಸೂಕ್ಷ್ಮವಾಗಿ ವಿಚಾರಿಸಿದನು, ಮತ್ತೆ ಅವನು ನಿಮ್ಮ ತಂದೆಯು ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ತಮ್ಮನಿದ್ದಾನೋ? ಎಂದು ಕೇಳಿದನು. ಆ ಪ್ರಶ್ನೆಗಳಿಗೆ ತಕ್ಕಂತೆ ನಾವು ಉತ್ತರಕೊಟ್ಟೆವು. ಅವನು ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ ಎಂದು ಹೇಳುವನೆಂದು ನಮಗೆ ಹೇಗೆ ತಿಳಿಯುವುದು>> ಎಂದರು.8ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ, <<ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡು, ನಾವು ಹೋಗುವೆವು. ಆಗ ನೀನೂ, ನಾವು ಮತ್ತು ನಮ್ಮ ಮಕ್ಕಳೂ ಸಾಯದೆ ಬದುಕುವೆವು.9ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರುಗಿ ಕರೆದುಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ಅಪರಾಧ ಎಂದೆಂದಿಗೂ ನನ್ನ ಮೇಲೆ ಇರಲಿ.10ನಾವು ತಡಮಾಡದೆ ಹೋಗಿದ್ದರೆ ಇಷ್ಟರೊಳಗೆ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು>> ಎಂದು ಹೇಳಿದನು.11ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, <<ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.12ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರಬಹುದು.13ನಿಮ್ಮ ತಮ್ಮನನ್ನೂ ಕರೆದುಕೊಂಡು, ತಿರುಗಿ ಆ ಮನುಷ್ಯನ ಬಳಿಗೆ ಹೋಗಿರಿ.14ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ>> ಎಂದು ಹೇಳಿದನು.15ಆಗ ಆ ಮನುಷ್ಯರು ಕಾಣಿಕೆಯನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನೂ ತೆಗೆದುಕೊಂಡು, ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೋಗಿ ಯೋಸೇಫನ ಎದುರಿನಲ್ಲಿ ನಿಂತುಕೊಂಡರು.16ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, <<ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು>> ಎಂದು ಅಪ್ಪಣೆಕೊಟ್ಟನು.17ಯೋಸೇಫನ ಅಪ್ಪಣೆಯ ಮೇರೆಗೆ ಗೃಹನಿರ್ವಾಹಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋದನು.18ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, <<ಮೊದಲನೆಯ ಸಾರಿ ನಮ್ಮ ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿಮಿತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ. ನಮ್ಮ ಮೇಲೆ ಫಕ್ಕನೆ ಬಿದ್ದು, ನಮ್ಮನ್ನೂ, ನಮ್ಮ ಕತ್ತೆಗಳನ್ನೂ ತೆಗೆದುಕೊಂಡು ನಮ್ಮನ್ನು ದಾಸರನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಕರೆಸಿದ್ದಾನೆ>> ಎಂದುಕೊಂಡರು.19ಆಗ ಅವರು ಯೋಸೇಫನ ಗೃಹನಿರ್ವಾಹಕನ ಬಳಿಗೆ ಹೋಗಿ ಮನೆಯ ಬಾಗಿಲ ಬಳಿ ನಿಂತುಕೊಂಡು ಅವನ ಸಂಗಡ ಮಾತನಾಡಿ ಅವನಿಗೆ,20<<ಅಯ್ಯಾ, ಮೊದಲನೆಯ ಸಾರಿ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವು.21ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ನಮ್ಮ ನಮ್ಮ ಚೀಲದಲ್ಲೇ ಇತ್ತು. ಅದನ್ನು ಹಿಂತಿರುಗಿಸಲು ತಂದಿದ್ದೇವೆ.22ದವಸವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಆ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೋ ನಮಗೆ ತಿಳಿಯದು>> ಎಂದು ಹೇಳಿದರು.23ಅದಕ್ಕೆ ಅವನು, <<ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು>> ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.24ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದನು. ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಡಿಸಿ, ಅವರ ಕತ್ತೆಗಳಿಗೂ ಮೇವು ಹಾಕಿಸಿದನು.25ತಾವು ಅಲ್ಲೇ ಊಟ ಮಾಡಬೇಕೆಂಬ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಯೋಸೇಫನಿಗೆ ಕೊಡಲು ಸಿದ್ಧಮಾಡಿಕೊಂಡರು.26ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.27ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, <<ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?>> ಎಂದು ಕೇಳಿದನು.28ಅವರು ಅದಕ್ಕೆ, <<ನಿನ್ನ ಸೇವಕನಾದ ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಬದುಕಿದ್ದಾನೆ>> ಎಂದು ಹೇಳಿ, ತಮ್ಮ ತಲೆಗಳನ್ನು ಬಾಗಿಸಿ ಅವನಿಗೆ ಅಡ್ಡಬಿದ್ದರು.29ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, <<ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?>> ಎಂದು ಕೇಳಿ ಅವನಿಗೆ, <<ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ>> ಎಂದು ಹೇಳಿದನು.30ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಳು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.31ಆ ಮೇಲೆ ಮುಖವನ್ನು ತೊಳೆದುಕೊಂಡು ಹೊರಗೆ ಬಂದು, ಮನಸ್ಸನ್ನು ಬಿಗಿ ಹಿಡಿದು, <<ಊಟಕ್ಕೆ ಬಡಿಸಿರಿ>> ಎಂದು ಅಪ್ಪಣೆ ಕೊಟ್ಟನು.32ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು.33ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮೊಳಗೆ ಆಶ್ಚರ್ಯಪಟ್ಟರು.34ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.
44ಯೋಸೇಫನ ಬೆಳ್ಳಿಯ ಪಾತ್ರೆ
1ಯೋಸೇಫನು ತರುವಾಯ ತನ್ನ ಗೃಹನಿರ್ವಾಹಕನಿಗೆ, <<ಆ ಮನುಷ್ಯರು ಚೀಲಗಳನ್ನು ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಲ್ಲಿ ಅವನವನ ಹಣದ ಗಂಟನ್ನು ಇಡಿರಿ.2ಕಿರಿಯವನ ಚೀಲದಲ್ಲಿ ಅವನು ದವಸಕ್ಕೆ ತಂದ ಹಣವನ್ನಲ್ಲದೇ, ತನ್ನ ಬೆಳ್ಳಿಯ ಪಾನ ಪಾತ್ರೆಯನ್ನು ಇಡಬೇಕು>> ಎಂದು ಅಪ್ಪಣೆಕೊಡಲು, ಗೃಹನಿರ್ವಾಹಕನು ಹಾಗೆಯೇ ಮಾಡಿದನು.3ಅವರೆಲ್ಲರೂ ಬೆಳಿಗ್ಗೆ ಹೊತ್ತು ಅವರು ಮೂಡುವಾಗ ಅಪ್ಪಣೆ ಪಡೆದು, ಕತ್ತೆಗಳ ಸಹಿತವಾಗಿ ಹೊರಟುಹೋದರು.4ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, <<ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?5ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ? ಅವನು ದೈವೋಕ್ತಿಯನ್ನು ಹೇಳುವವನಲ್ಲವೆ? ನೀವು ಹೀಗೆ ಮಾಡಿದ್ದು ಕೆಟ್ಟಕೆಲಸ>> ಎಂದು ಅವರಿಗೆ ಹೇಳು ಎಂದನು.6ಗೃಹನಿರ್ವಾಹಕನು ಅವರನ್ನು ಹಿಂದಟ್ಟಿ, ಅವರಿಗೆ ಈ ಮಾತುಗಳನ್ನು ಹೇಳಿದನು.7ಅವರು ಅವನಿಗೆ, <<ನಮ್ಮ ಒಡೆಯನೇ, ಇಂಥಾ ಮಾತುಗಳನ್ನು ಹೇಳುವುದೇನು? ನಿನ್ನ ಸೇವಕರು ಇಂಥಾ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.8ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ತಿರುಗಿ ನಿಮಗೆ ಕೊಡಲು ತಂದೆವು. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?9ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ, ಅವನು ಮರಣ ದಂಡನೆಯನ್ನು ಹೊಂದಲಿ. ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ದಾಸರಾಗುವೆವು>> ಎಂದರು.10ಅದಕ್ಕೆ ಅವನು, <<ಒಳ್ಳೆಯದು, ನೀವು ಹೇಳಿದಂತೆ ಆಗಲಿ. ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ, ಅವನು ನನಗೆ ದಾಸನಾಗಬೇಕು. ಉಳಿದವರು ನಿರಪರಾಧಿಗಳು>> ಎಂದು ಹೇಳಿದಾಗ,11ಅವರು ತಟ್ಟನೆ, ಪ್ರತಿಯೊಬ್ಬನೂ ತನ್ನ ತನ್ನ ಚೀಲವನ್ನು ನೆಲಕ್ಕಿಳಿಸಿ ಅವುಗಳನ್ನು ಬಿಚ್ಚಿದರು.12ಅವನು ಹಿರಿಯವನಿಂದ ಹಿಡಿದು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.13ಸಿಕ್ಕಿದಾಗ, ಅವರು ದುಃಖಾಕ್ರಾಂತರಾಗಿ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂತಿರುಗಿ ಬಂದರು.14ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನು ಅಲ್ಲೇ ಇದ್ದನು. ಅವರು ಅವನೆದುರಿಗೆ ಅಡ್ಡಬಿದ್ದರು.15ಯೋಸೇಫನು ಅವರಿಗೆ, <<ನೀವು ಮಾಡಿರುವ ಈ ಕೃತ್ಯವು ಏನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?>> ಎಂದು ಕೇಳಲು,16ಯೆಹೂದನು, <<ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು>> ಎಂದನು.17ಯೋಸೇಫನು, <<ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ>> ಎಂದನು.18ಯೆಹೂದನು ಹತ್ತಿರಕ್ಕೆ ಬಂದು, <<ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ.19ತಾವು ತಮ್ಮ ಸೇವಕರಾದ ನಮ್ಮನ್ನು ಕುರಿತು, <ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾನೋ?> ಎಂದು ಕೇಳಲು,20ನಾವು <ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು> ಎಂದು ಹೇಳಿದೆವು.21<<ಅದಕ್ಕೆ ತಾವು, <ನಾನು ಆ ಹುಡುಗನನ್ನು ನೋಡಬೇಕು ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ> ಎಂದು ಅಪ್ಪಣೆಕೊಡಲು,22ನಾವು ಸ್ವಾಮಿಯವರಿಗೆ, <ಆ ಹುಡುಗನು ತನ್ನ ತಂದೆಯನ್ನು ಬಿಟ್ಟು ಬರುವುದಿಲ್ಲ. ಅವನು ತಂದೆಯನ್ನು ಅಗಲಿದರೆ ತಂದೆಯು ಸಾಯುವನು> ಎಂದು ಹೇಳಿದೆವು.23ಅದಕ್ಕೆ ನೀವು, <ನಿಮ್ಮ ತಮ್ಮನು ನಿಮ್ಮ ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಬಾರದು> ಎಂದು ಅಪ್ಪಣೆಕೊಟ್ಟಿರಿ.24ನಾವು ನಿಮ್ಮ ಸೇವಕನಾದ ನಮ್ಮ ತಂದೆಯ ಬಳಿಗೆ ಹೋಗಿ ಸ್ವಾಮಿಯ ಮಾತುಗಳನ್ನು ತಿಳಿಸಿದೆವು.25<<ನಮ್ಮ ತಂದೆಯು, <ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ> ಎಂದು ಹೇಳಿದಾಗ,26ನಾವು ಆತನಿಗೆ, <ಹೇಗೆ ಹೋಗುವುದು, ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಇಲ್ಲವಾದರೇ, ನಾವು ಆ ಮನುಷ್ಯನ ಮುಖವನ್ನು ನೋಡಲು ಆಗುವುದಿಲ್ಲ> ಎಂದು ಹೇಳಿದೆವು.27ಅದಕ್ಕೆ ನಿನ್ನ ಸೇವಕನಾದ, ನಮ್ಮ ತಂದೆಯು, <ನನ್ನ ಪತ್ನಿಯಲ್ಲಿ ನನಗೆ ಇಬ್ಬರು ಗಂಡು ಮಕ್ಕಳು ಹುಟ್ಟಿರುವುದು ನಿಮಗೆ ತಿಳಿದೇ ಇದೆ.28ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟು ಹೋದನು. ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿ ಹಾಕಲ್ಪಟ್ಟಿರಬೇಕೆಂದು ತಿಳಿದೆನು. ಅಂದಿನಿಂದ ನಾನು ಅವನನ್ನು ಕಾಣಲಿಲ್ಲ.29ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ> ಎಂದನು.30<<ನಮ್ಮ ತಂದೆಯ ಪ್ರಾಣವು ಇವನ ಪ್ರಾಣವು ಒಂದೇ ಆಗಿರುವುದರಿಂದ ನಾವು ನಿನ್ನ ಸೇವಕನಾದ ನಮ್ಮ ತಂದೆಯ ಬಳಿಗೆ ಹೋದಾಗ,31ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು.32ಸೇವಕನಾದ ನಾನು ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ, <ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದೆ ಹೋದರೆ, ಎಂದೆಂದಿಗೂ ತಂದೆಗೆ ದೋಷಿಯಾಗಿರುವೆನು> ಎಂದು ಮಾತು ಕೊಟ್ಟಿದ್ದೇನೆ.33<<ಆದುದರಿಂದ ಸೇವಕನಾದ ನಾನು ಈ ಹುಡುಗನ ಬದಲಾಗಿ ಸ್ವಾಮಿಗೆ ಗುಲಾಮನಾಗುವಂತೆಯೂ ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆಯೂ ಅನುಗ್ರಹ ಮಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.34ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಲಿ? ಹೋದರೆ, ನನ್ನ ತಂದೆಗೆ ಆಗುವ ಆಘಾತ, ದುಃಖ ನನ್ನಿಂದ ನೋಡಲಾಗದು>> ಎಂದನು.
45ಯೋಸೇಫನು ತನ್ನನ್ನು ಗುರುತಿಸಿಕೊಂಡದ್ದು
1ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, <<ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ>> ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ.2ಅವನು ಗಟ್ಟಿಯಾಗಿ ಅತ್ತದ್ದರಿಂದ ಐಗುಪ್ತರಿಗೂ, ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು.3ಅವನು, <<ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?>> ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.4ಯೋಸೇಫನು, <<ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ>> ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ <<ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ.5ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.6ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.7ನಿಮ್ಮ ಸಂತತಿ ಭೂಮಿಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ, ಬಹು ಜನವಾಗುವಂತೆಯೂ ದೇವರು ನನ್ನನ್ನು ಮೊದಲು ಕಳುಹಿಸಿದನು.8<<ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.9ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, <ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ.10ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು.11ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು> ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.12<<ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ. ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ.13ಐಗುಪ್ತ ದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ, ನೀವು ಕಂಡಿದ್ದೆಲ್ಲವನ್ನು ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು>> ಎಂದು ಹೇಳಿ,14ತನ್ನ ತಮ್ಮನಾದ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು.15ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.16ಯೋಸೇಫನ ಅಣ್ಣತಮ್ಮಂದಿರು ಬಂದ ಸಮಾಚಾರವು ಫರೋಹನ ಮನೆಯವರಿಗೆ ತಿಳಿದಾಗ ಫರೋಹನಿಗೂ ಅವನ ಪರಿವಾರದವರಿಗೂ ಸಂತೋಷವಾಯಿತು.17ಫರೋಹನು ಯೋಸೇಫನನ್ನು ಕರೆಯಿಸಿ, <<ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆ ಏನೆಂದರೆ <ನಿಮ್ಮ ಕತ್ತೆಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ,18ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ.19ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.20ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ> >> ಎಂದು ಹೇಳಿದನು.21ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.22ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನು ಕೊಟ್ಟನು. ಬೆನ್ಯಾಮೀನನಿಗೋ ಮುನ್ನೂರು ಬೆಳ್ಳಿ ನಾಣ್ಯಗಳನ್ನೂ ಹಾಗೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು.23ತನ್ನ ತಂದೆಗೋಸ್ಕರ ಐಗುಪ್ತ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು, ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು.24ಆಗ ತನ್ನ ಅಣ್ಣತಮ್ಮಂದಿರಿಗೆ, <<ನೀವು ದಾರಿಯಲ್ಲಿ ಜಗಳಮಾಡಬೇಡಿರಿ>> ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು.25ಅವರು ಐಗುಪ್ತ ದೇಶವನ್ನು ಬಿಟ್ಟು ಕಾನಾನ್ ದೇಶಕ್ಕೆ ಸೇರಿ ತಂದೆಯಾದ ಯಾಕೋಬನ ಬಳಿಗೆ ಬಂದರು.26ಅವನಿಗೆ, <<ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ>> ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.27ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.28ಆಗ ಇಸ್ರಾಯೇಲನು, <<ನನ್ನ ಮಗನಾದ ಯೋಸೇಫನು ಜೀವಂತವಾಗಿದ್ದಾನೆ. ನಾನು ಸಾಯುವುದಕ್ಕಿಂತ ಮೊದಲು ಹೋಗಿ ಅವನನ್ನು ನೋಡುವೆನು>> ಎಂದನು.
46ಯಾಕೋಬನು ಐಗುಪ್ತಕ್ಕೆ ಹೋದದ್ದು
1ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು, ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಅರ್ಪಿಸಿದನು.2ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, <<ಯಾಕೋಬನೇ, ಯಾಕೋಬನೇ>> ಎಂದು ಕರೆಯಲು, ಅವನು, <<ಇಗೋ ಇದ್ದೇನೆ>> ಎಂದನು.3ಆತನು ಅವನಿಗೆ, <<ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು.4ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ಪುನಃ ಕರೆದುಕೊಂಡು ಬರುವೆನು; (ನಿನ್ನ ಅವಸಾನಕಾಲದಲ್ಲಿ) ನಿನ್ನ ಮರಣದ ಸಮಯದಲ್ಲಿ ಯೋಸೇಫನು ನಿನ್ನೊಂದಿಗೆ ಇದ್ದು ಸಂತೈಸುವನು>> ಎಂದು ಹೇಳಿದನು.5ಬಳಿಕ ಯಾಕೋಬನು ಬೇರ್ಷೆಬದಿಂದ ಹೊರಟನು. ಫರೋಹನು ಅವನನ್ನು ಕರೆದುಕೊಂಡು ಬರುವುದಕ್ಕೆ ಕಳುಹಿಸಿದ್ದ ರಥಗಳಲ್ಲಿ ಇಸ್ರಾಯೇಲನ ಮಕ್ಕಳು, ತಮ್ಮ ತಂದೆಯಾದ ಯಾಕೋಬನನ್ನೂ, ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು.6ಯಾಕೋಬನೂ, ಅವನ ಮನೆಯವರೆಲ್ಲರೂ ತಮ್ಮ ದನಕುರಿಗಳನ್ನೂ ತಾವು ಕಾನಾನ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಸಂಪತ್ತುಗಳನ್ನೂ ತೆಗೆದುಕೊಂಡು ಐಗುಪ್ತ ದೇಶವನ್ನು ತಲುಪಿದರು.7ಹೀಗೆ ಯಾಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮಕ್ಕಳನ್ನೂ, ತನ್ನ ಮನೆಯವರೆಲ್ಲರನ್ನೂ ತನ್ನ ಸಂಗಡಲೇ ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು.8ಐಗುಪ್ತ ದೇಶಕ್ಕೆ ಬಂದು ಸೇರಿದ ಇಸ್ರಾಯೇಲನ ಮಕ್ಕಳ ಹೆಸರುಗಳು: ಯಾಕೋಬನು ಮತ್ತು ಅವನ ಚೊಚ್ಚಲ ಮಗನಾದ ರೂಬೇನನು.9ರೂಬೇನನ ಮಕ್ಕಳು: ಹನೋಕ್, ಫಲ್ಲೂ, ಹೆಚ್ರೋನ್, ಕರ್ಮೀ.10ಸಿಮೆಯೋನನ ಮಕ್ಕಳು: ಯೆಮೂವೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ.11ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ.12ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್, ಜೆರಹ. ಇವರಲ್ಲಿ ಏರ್, ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತು ಹೋಗಿದ್ದರು. ಪೆರೆಚನ ಮಕ್ಕಳು: ಹೆಚ್ರೋನ್, ಹಾಮೂಲ್.13ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್, ಶಿಮ್ರೋನ್.14ಜೆಬುಲೂನನ ಮಕ್ಕಳು: ಸೆರೆದ್, ಏಲೋನ್, ಯಹ್ಲೇಲ್15ಇವರೆಲ್ಲರು ಲೇಯಳ ಸಂತತಿಯವರು. ಆಕೆಯು ಯಾಕೋಬನಿಗೆ ಇವರನ್ನೂ, ದೀನಳೆಂಬ ಹೆಣ್ಣು ಮಗಳನ್ನೂ ಪದ್ದನ್ ಅರಾಮಿನಲ್ಲಿ ಪಡೆದಳು. ಆಕೆಯಿಂದ ಹುಟ್ಟಿದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.16ಗಾದನ ಮಕ್ಕಳು: ಚಿಪ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ, ಅರೇಲೀ;17ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಗಾ, ಇವರ ತಂಗಿಯಾದ ಸೆರಹ; ಬೆರೀಗನ ಮಕ್ಕಳಾದ ಹೆಬೆರ್, ಮಲ್ಕೀಯೇಲ್.18ಇವರೆಲ್ಲರು ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಹದಿನಾರು ಮಂದಿ.19ಯಾಕೋಬನ ಹೆಂಡತಿಯಾದ ರಾಹೇಲಳ ಮಕ್ಕಳು ಯೋಸೇಫ್, ಬೆನ್ಯಾಮೀನ್.20ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯೀಮ್.21ಬೆನ್ಯಾಮೀನನ ಮಕ್ಕಳು: ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಏಹೀ, ರೋಷ್, ಮುಪ್ಪೀಮ್, ಹುಪ್ಪೀಮ್, ಆರ್ದ್.22ಈ ಹದಿನಾಲ್ಕು ಮಂದಿಯು ರಾಹೇಲಳ ಮೂಲಕ ಯಾಕೋಬನಿಂದಾದ ಸಂತತಿಯವರು.23ದಾನನ ಮಗನು: ಹುಶೀಮ್.24ನಫ್ತಾಲಿಯ ಮಕ್ಕಳು: ಯಹೇಲ್, ಗೂನೀ, ಯೇಚೆರ್, ಶಿಲ್ಲೇಮ್.25ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ಬಿಲ್ಹಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಏಳು ಮಂದಿ.26ಯಾಕೋಬನ ಸೊಸೆಯರಲ್ಲದೆ ಯಾಕೋಬನಿಂದಲೇ ಹುಟ್ಟಿ ಅವನೊಂದಿಗೆ ಐಗುಪ್ತ ದೇಶಕ್ಕೆ ಹೋದವರು ಒಟ್ಟು ಅರವತ್ತಾರು ಮಂದಿ.27ಅವರಲ್ಲದೆ ಐಗುಪ್ತ ದೇಶದಲ್ಲಿ ಯೋಸೇಫನಿಗೆ ಹುಟ್ಟಿದವರು ಇಬ್ಬರು. ಐಗುಪ್ತ ದೇಶಕ್ಕೆ ಹೋದ ಯಾಕೋಬನ ಕುಟುಂಬದವರೆಲ್ಲರು ಒಟ್ಟು ಎಪ್ಪತ್ತು ಮಂದಿ.ಯಾಕೋಬನು ಗೋಷೆನಿನಲ್ಲಿ ವಾಸಿಸಿದ್ದು
28ಯಾಕೋಬನು ಗೋಷೆನ್ ಸೀಮೆಯ ದಾರಿಯನ್ನು ವಿಚಾರಿಸುವುದಕ್ಕೆ ಯೆಹೂದನನ್ನು ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಸೀಮೆಗೆ ಬಂದಾಗ,29ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು.30ಇಸ್ರಾಯೇಲನು ಯೋಸೇಫನಿಗೆ, <<ನಾನು ನಿನ್ನ ಮುಖವನ್ನು ನೋಡಿ, ನೀನು ಇನ್ನೂ ಜೀವದಿಂದಿರುವುದನ್ನು ಕಂಡು ಸಂತೃಪ್ತನಾಗಿ ಸಾಯುವೆನು>> ಎಂದು ಹೇಳಿದನು.31ಯೋಸೇಫನು ತನ್ನ ಅಣ್ಣತಮ್ಮಂದಿರನ್ನೂ, ತಂದೆಯ ಮನೆಯವರೆಲ್ಲರನ್ನು ಕುರಿತು <<ನಾನು ಹೋಗಿ ಫರೋಹನ ಸನ್ನಿಧಾನದಲ್ಲಿ ನೀವು ಬಂದ ವರ್ತಮಾನವನ್ನು ತಿಳಿಸಿ, ಕಾನಾನ್ ದೇಶದಲ್ಲಿದ್ದ ನನ್ನ ಅಣ್ಣತಮ್ಮಂದಿರೂ, ತನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ;32ಅವರು ಕುರಿಕಾಯುವವರು, ಪಶುಪಾಲನೆ ಮಾಡುವುದು ಅವರ ಕಸುಬು; ಅವರು ತಮ್ಮ ಕುರಿದನಗಳನ್ನೂ ತಮಗಿರುವ ಸರ್ವಸ್ವವನ್ನೂ ತಂದಿದ್ದಾರೆ>> ಎಂದು ಹೇಳುತ್ತೇನೆ.33ಫರೋಹನು ನಿಮ್ಮನ್ನು ಕರೆಯಿಸಿ, <<ನಿಮ್ಮ ಕಸುಬು ಏನು?>> ಎಂದು ಕೇಳಿದರೆ,34<<ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು>> ಎಂದನು.
47ಫರೋಹನೊಡನೆ ಸಂದರ್ಶನ
1ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, <<ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ, ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ>> ಎಂದನು.2ಅಲ್ಲದೆ ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು.3ಫರೋಹನು ಯೋಸೇಫನ ಅಣ್ಣತಮ್ಮಂದಿರಿಗೆ, <<ನಿಮ್ಮ ಕಸುಬು ಏನು?>> ಎಂದು ಅವರನ್ನು ಕೇಳಲು ಅವರು, <<ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಹಾಗೆ ಕುರಿಕಾಯುವವರು>> ಎಂದು ಹೇಳಿದರು.4ಅದಲ್ಲದೆ ಅವರು ಫರೋಹನಿಗೆ, <<ಕಾನಾನ್ ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷೆನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು>> ಎಂದು ಬೇಡಿಕೊಂಡರು.5ಆಗ ಫರೋಹನು ಯೋಸೇಫನಿಗೆ, <<ನಿನ್ನ ತಂದೆಯೂ, ಅಣ್ಣತಮ್ಮಂದಿರೂ ನಿನ್ನ ಬಳಿಗೆ ಬಂದಿದ್ದಾರೆ;6ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು>> ಎಂದು ಹೇಳಿದನು.7ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರೆದುಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು, ಯಾಕೋಬನು ಫರೋಹನನ್ನು ಆಶೀರ್ವದಿಸಿದನು.8ಫರೋಹನು, <<ನಿನಗೆ ಈಗ ಎಷ್ಟು ವರ್ಷ?>> ಎಂದು ಕೇಳಿದನು.9ಯಾಕೋಬನು ಫರೋಹನಿಗೆ, <<ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ>> ಎಂದು ಹೇಳಿದನು.10ಪುನಃ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.11ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಮಾಡಲು ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವತ್ತು ಕೊಟ್ಟನು.12ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.ಬರಗಾಲದಲ್ಲಿ ಯೋಸೇಫನ ಆಡಳಿತ
13ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್ ದೇಶವು ಕ್ಷಾಮದಿಂದ ಬರಡಾದವು.14ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.15ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, <<ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?>> ಎಂದು ಹೇಳಿದರು.16ಅದಕ್ಕೆ ಯೋಸೇಫನು, <<ನಿಮ್ಮ ಕುರಿದನಗಳನ್ನು ತೆಗೆದುಕೊಂಡು ಬನ್ನಿರಿ; ಹಣವಿಲ್ಲದಿದ್ದರೆ ಕುರಿದನಗಳನ್ನು ತೆಗೆದುಕೊಂಡು, ಧಾನ್ಯವನ್ನು ನಿಮಗೆ ಕೊಡುತ್ತೇನೆ>> ಎಂದನು.17ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.18ಆ ವರ್ಷ ಕಳೆದ ನಂತರ ಅವರು ಎರಡನೆಯ ವರ್ಷದಲ್ಲಿ ಅವನ ಬಳಿಗೆ ಬಂದು, <<ನಮ್ಮ ಹಣವೆಲ್ಲಾ ಮುಗಿದು ಹೋಗಿದೆ; ನಮ್ಮ ಕುರಿದನಗಳು ಸ್ವಾಮಿಯ ವಶವಾದವು; ಹೀಗಿರುವುದರಿಂದ ನಮ್ಮ ಭೂಮಿಯೂ, ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾಮಿಗೆ ಮರೆಮಾಡದೆ ತಿಳಿಸುತ್ತೇವೆ>> ಎಂದರು.19<<ನಿನ್ನ ಕಣ್ಣೆದುರಿಗೆ ನಾವು ಏಕೆ ಸಾಯಬೇಕು; ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು>> ಎಂದು ಹೇಳಿದರು.20ಹೀಗೆ ಯೋಸೇಫನು ಐಗುಪ್ತರಿಂದ ಎಲ್ಲಾ ಸಾಗುವಳಿಯ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಪ್ರತಿಯೊಬ್ಬ ಐಗುಪ್ತನ್ನು ತನ್ನ ಹೊಲಗದ್ದೆಗಳನ್ನು ಮಾರಿಬಿಟ್ಟನು. ಬರವು ಐಗುಪ್ತದಲ್ಲಿ ಘೋರವಾಗಿದ್ದದರಿಂದ ಅವರೆಲ್ಲರ ಭೂಮಿಯು ಫರೋಹನ ವಶವಾಯಿತು.21ಯೋಸೇಫನು ಐಗುಪ್ತ ದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು.22ಪುರೋಹಿತರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಪುರೋಹಿತರು ಫರೋಹನ ಕಡೆಯಿಂದ ಭತ್ಯೆ ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಭತ್ಯೆದಿಂದಲೇ ಜೀವನ ಮಾಡುತ್ತಿದ್ದರು; ಆದುದರಿಂದ ತಮ್ಮ ಭೂಮಿಯನ್ನು ಮಾರಲಿಲ್ಲ.23ಯೋಸೇಫನು ಪ್ರಜೆಗಳಿಗೆ, <<ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆ ಎಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂಮಿಯನ್ನು ಬಿತ್ತಿರಿ.24ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ>> ಎಂದು ಹೇಳಿದನು.25ಅದಕ್ಕೆ ಅವರು, <<ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ>> ಎಂದರು.26ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.ಯಾಕೋಬನ ಆಜ್ಞೆ
27ಇಸ್ರಾಯೇಲರು ಐಗುಪ್ತ ದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.28ಯಾಕೋಬನು ಐಗುಪ್ತ ದೇಶದಲ್ಲಿ ಹದಿನೇಳು ವರ್ಷ ಬದುಕಿದನು. ಅವನ ಜೀವಿತ ಕಾಲದ ದಿನಗಳು ನೂರ ನಲ್ವತ್ತೇಳು ವರ್ಷಗಳು.29ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, <<ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದ್ದಿದೆಯಾದ್ದರೆ ಪದ್ದತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಗಸ್ತಿಕೆಯಿಂದ ತೋರಿಸು. ನನ್ನನ್ನು ಐಗುಪ್ತದೇಶದಲ್ಲಿ ಸಮಾಧಿ ಮಾಡಬೇಡ.30ನಾನು ಮರಣ ಹೊಂದಿ ನನ್ನ ಪೂರ್ವಿಕರ ಬಳಿಗೆ ಸೇರಿದಾಗ ನನ್ನ ಮೃತ ದೇಹವನ್ನು ಐಗುಪ್ತ ದೇಶದಿಂದ ತೆಗೆದುಕೊಂಡು ಹೋಗಿ ಆ ಪೂರ್ವಿಕರ ಸ್ಮಶಾನ ಭೂಮಿಯಲ್ಲಿಯೇ ಸಮಾಧಿ ಮಾಡಬೇಕು. ಹಾಗೆ ಮಾಡುತ್ತೇನೆಂಬುದಾಗಿ ನನಗೆ ಪ್ರಮಾಣ ಮಾಡಬೇಕು>> ಎಂದು ಹೇಳಲು, ಅವನು, <<ನೀನು ಹೇಳಿದಂತೆಯೇ ಮಾಡುತ್ತೇನೆ>> ಎಂದನು.31ಇಸ್ರಾಯೇಲನು, <<ಪ್ರಮಾಣಮಾಡು>> ಎನ್ನಲು ಅವನು ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ತನ್ನ ಊರುಕೋಲಿನ ಮೇಲೆ ಬಾಗಿ ದೇವರಿಗೆ ನಮಸ್ಕಾರ ಮಾಡಿದನು.
48ಯಾಕೋಬನು ಯೋಸೇಫನ ಮಕ್ಕಳನ್ನು ಆಶೀರ್ವದಿಸಿದ್ದು
1ಕೆಲವು ಕಾಲವಾದ ಮೇಲೆ ಯೋಸೇಫನಿಗೆ, <<ಅವನ ತಂದೆಯು ಅಸ್ವಸ್ಥನಾಗಿದ್ದಾನೆ>> ಎಂಬ ವಾರ್ತೆಯು ದೊರಕಿತು. ಆಗ ಯೋಸೇಫನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ತನ್ನ ಸಂಗಡ ಕರೆದುಕೊಂಡು ತಂದೆಯ ಬಳಿಗೆ ಬಂದನು.2<<ನಿನ್ನ ಮಗನಾದ ಯೋಸೇಫನು ನಿನ್ನ ಬಳಿಗೆ ಬಂದಿದ್ದಾನೆ>> ಎಂದು ಯಾಕೋಬನಿಗೆ ತಿಳಿಸಲು, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಎದ್ದು ಕುಳಿತುಕೊಂಡನು.3ಯಾಕೋಬನು, ಯೋಸೇಫನಿಗೆ, <<ಸರ್ವಶಕ್ತನಾದ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ದರ್ಶನ ಕೊಟ್ಟು ಆಶೀರ್ವದಿಸಿದನು.4ಆತನು ನನಗೆ, <ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು> >> ಎಂದು ಹೇಳಿದನು.5ಐಗುಪ್ತ ದೇಶಕ್ಕೆ ನಿನ್ನ ಬಳಿಗೆ ಬರುವುದಕ್ಕಿಂತ ಮೊದಲು ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನಗೆ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೆ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.6ಅವರ ತರುವಾಯ ನೀನು ಪಡೆದ ಮಕ್ಕಳು ನಿನ್ನವರಾಗಿರಲಿ. ಅವರು ತಮ್ಮ ಅಣ್ಣಂದಿರ ಸ್ವತ್ತಿನಲ್ಲಿ ಬಾಧ್ಯತೆ ಹೊಂದಿ, ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ.7ನಾನು ಪದ್ದನ್ ಅರಾಮಿನಿಂದ ಬರುವಾಗ ಕಾನಾನ್ ದೇಶದಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ದಾರಿಯಲ್ಲೇ ಸತ್ತುಹೋದಳು. ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಗೆ ಸಮಾಧಿ ಮಾಡಿದೆನು ಎಂದನು.8ನಂತರ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ, <<ಇವರು ಯಾರು?>> ಎಂದು ಕೇಳಲು,9ಯೋಸೇಫನು ತನ್ನ ತಂದೆಗೆ, <<ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು>> ಎಂದು ಹೇಳಿದನು. ಅದಕ್ಕವನು, <<ನಾನು ಇವರನ್ನು ಆಶೀರ್ವದಿಸುತ್ತೇನೆ. ನನ್ನ ಹತ್ತಿರ ಕರೆದುಕೊಂಡು ಬಾ>> ಎಂದನು.10ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬು ಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.11ಆಗ ಇಸ್ರಾಯೇಲನು ಯೋಸೇಫನಿಗೆ, <<ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ>> ಎಂದನು.12ಆಗ ಯೋಸೇಫನು ಅವರನ್ನು ತಂದೆಯ ಮಡಿಲಿನಿಂದ ಎತ್ತಿಕೊಂಡು ತನ್ನ ತಂದೆಗೆ ತಲೆಬಾಗಿ ನಮಸ್ಕರಿಸಿದನು.13ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ, ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ, ಅವರಿಬ್ಬರನ್ನೂ ತನ್ನ ತಂದೆಯ ಬಳಿ ನಿಲ್ಲಿಸಿದನು.14ಮನಸ್ಸೆಯು ಚೊಚ್ಚಲ ಮಗನಾಗಿದ್ದರೂ, ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟನು.15ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ,<<ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ,
ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,
16ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ.
ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ,
ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ>> ಎಂದನು.
17ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವುದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಟ್ಟು,18ಯೋಸೇಫನು ತಂದೆಗೆ, <<ಅಪ್ಪಾ, ಇವನೇ ಚೊಚ್ಚಲ ಮಗನು ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು>> ಎಂದು ಹೇಳಿದನು.19ಆದರೆ ಅವನ ತಂದೆ ಒಪ್ಪದೆ, <<ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು>> ಎಂದು ಹೇಳಿದನು.20ಆ ದಿನದಲ್ಲಿ ಅವನು ಅವರನ್ನು ಆಶೀರ್ವದಿಸಿ, <<ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಆಶೀರ್ವದಿಸಲ್ಪಡುವರು. ಎಫ್ರಾಯೀಮ್ ಹಾಗೂ ಮನಸ್ಸೆಯ ಹಾಗೆ ದೇವರು ನಿಮ್ಮನ್ನೂ ಆಶೀರ್ವದಿಸಲಿ>> ಎಂದು ಹೇಳಿ ಎಫ್ರಾಯೀಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.21ಇಸ್ರಾಯೇಲನು ಯೋಸೇಫನಿಗೆ, <<ನನಗೆ ಮರಣವು ಸಮೀಪಿಸಿದೆ, ಆದರೆ ದೇವರು ನಿಮ್ಮೊಂದಿಗಿದ್ದು, ನಿಮ್ಮನ್ನು ಪೂರ್ವಿಕರ ದೇಶಕ್ಕೆ ಪುನಃ ಬರಮಾಡುವನು.22ಇದಲ್ಲದೆ, ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ>> ಎಂದು ಹೇಳಿದನು. 49ತನ್ನ ಮಕ್ಕಳನ್ನು ಕುರಿತು ಯಾಕೋಬನ ಭವಿಷ್ಯವಾಣಿ
1ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.
2ಯಾಕೋಬನ ಮಕ್ಕಳೇ, ನೀವೆಲ್ಲರೂ ಕೂಡಿ ಬಂದು ಕೇಳಿರಿ.ನಿಮ್ಮ ತಂದೆಯಾದ ಇಸ್ರಾಯೇಲನ ಮಾತನ್ನು ಲಾಲಿಸಿರಿ.
3ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ,ಗೌರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ.
4ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ.ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ,
ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!
5ಸಿಮೆಯೋನನು ಲೇವಿಯೂ ಅಣ್ಣತಮ್ಮಂದಿರು.ಇವರ ಕತ್ತಿಗಳು ಹಿಂಸಾಚಾರದ ಆಯುಧಗಳು.
6ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು.ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ.
ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು.
ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು.
7ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದುಅದು ಶಾಪಗ್ರಸ್ಥವಾದುದಾಗಿದೆ.
ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು.
ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು.
8ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು.ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು.
ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.
9ಯೆಹೂದನು ಪ್ರಾಯದ ಸಿಂಹದಂತಿದ್ದಾನೆ.ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ.
ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ.
ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು?
10 ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ.ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ.
ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
11ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು.ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು;
ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು;
ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.
12ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿ ಇರುವವು.ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಗಾಗಿ ಇರುವವು.
13ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು.ಅವನಿಗೆ ಹಡಗುಗಳು ಸೇರುವ ಬಂದರು ಇರುವುದು.
ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವುದು.
14ಇಸ್ಸಾಕಾರನು ಕುರಿಯ ಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು.
15ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂಸುಖಾಸ್ಪದವೂ ಆಗಿರುವುದನ್ನು ಕಂಡನು.
ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು
ಬಿಟ್ಟೀ ಸೇವೆಮಾಡುವನು.
16ದಾನನು ಇಸ್ರಾಯೇಲರ ಕುಲಗಳಲ್ಲಿ ಒಂದರಂತೆತನ್ನ ಜನರಿಗೆ ನ್ಯಾಯತೀರಿಸುವನು.
17ದಾನನು ಮಾರ್ಗದ ಮಧ್ಯದಲ್ಲಿರುವ ವಿಷಸರ್ಪದಂತೆ ಇರುವನುಅದು ಕುದುರೆಯ ಹಿಮ್ಮಡಿಯನ್ನು ಕಚ್ಚುವುದು.
ಸವಾರನು ಕೆಳಗೆ ಅಂಗಾತವಾಗಿ ಬೀಳುವನು.
18ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ.
19ಗಾದನ ಮೇಲೆ ಸುಲಿಗೆ ಮಾಡುವವರು ಬೀಳಲು,ಇವನು ಅವರನ್ನು ಹಿಮ್ಮಟ್ಟಿಕೊಂಡು ಹೋಗುವನು.
20ಆಶೇರನಿಗೆ ಧಾನ್ಯ ಸಮೃದ್ಧಿಯಾಗುವುದು.ಅವನಲ್ಲಿ ರಾಜಭೋಗ ಪದಾರ್ಥಗಳು ದೊರಕುವವು.
21ನಫ್ತಾಲಿಯು ಸ್ವತಂತ್ರವಾಗಿ ಜಿಂಕೆಯಂತಿದ್ದಾನೆ.ಅವನಿಂದ ಇಂಪಾದ ಮಾತುಗಳುಂಟಾಗುವವು.
22ಯೋಸೇಫನು ಫಲಭರಿತವಾದ ವೃಕ್ಷವು,ಒರತೆಯ ಬಳಿಯಲ್ಲಿರುವ ಫಲವತ್ತಾದ ವೃಕ್ಷವೇ ಆಗಿದ್ದಾನೆ.
ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ.
23ಬಿಲ್ಲುಗಾರರು ಅವನನ್ನು ಆಕ್ರಮಿಸುವರು,ಹಗೆತನದಿಂದ ಬಾಣವನ್ನು ಅವನ ಮೇಲೆ ಪ್ರಯೋಗಿಸುವರು.
24ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ,ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ
ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು.
ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.
25ನಿನ್ನ ತಂದೆಯ ದೇವರು ನಿನಗೆ ಸಹಾಯ ಹಸ್ತವಾಗಿದ್ದಾನೆ.ನಿನ್ನ ತಂದೆಯ ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು,
ಆತನು ಮೇಲಣ ಆಕಾಶದಿಂದಲೂ,
ಕೆಳಗಣ ಸಾಗರದ ಸೆಲೆಗಳಿಂದಲೂ,
ಸ್ತನದಿಂದಲೂ, ಗರ್ಭಫಲದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ.
26 ನಿನ್ನ ತಂದೆಯ ಆಶೀರ್ವಾದಗಳು ನಿನ್ನ ಪೂರ್ವಿಕರ ಆಶೀರ್ವಾದಕ್ಕಿಂತಲೂ ಮೀಗಿಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು. 27<<ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ.ರಾತ್ರಿ ಹಿಡಿದುಕೊಂಡದ್ದನ್ನು ಬೆಳಿಗ್ಗೆ ತಿನ್ನುತ್ತಾನೆ.
ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು>> ಎಂದನು.
28ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು.ಯಾಕೋಬನ ಮರಣ ಮತ್ತು ಸಮಾಧಿ
29ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, <<ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.30ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.31ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು. ಅಲ್ಲಿ ನಾನು ಲೇಯಳನ್ನು ಸಮಾಧಿಮಾಡಿದ್ದೇನೆ.32ಹೊಲದೊಂದಿಗೆ ಹಿತ್ತಿಯರಿಂದ ಕ್ರಯಕ್ಕೆ ತೆಗೆದುಕೊಂಡ ಆ ಗುಹೆಯೊಳಗೆ ನನಗೂ ಸಮಾಧಿಮಾಡಬೇಕು>> ಎಂದನು.33ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.
501ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು.2ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, <<ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ>> ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.3ನಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು.4ಶೋಕಾಚರಣೆಯು ಮುಗಿದ ನಂತರ ಯೋಸೇಫನು ಫರೋಹನ ಪರಿವಾರದವರಿಗೆ, <<ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ,5<ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ> >> ಎಂದನು.6ಫರೋಹನು ಈ ಸಂಗತಿಯನ್ನು ಕೇಳಿ ಯೋಸೇಫನಿಗೆ, <<ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿ ಮಾಡಿಬರಬಹುದು>> ಎಂದು ಅಪ್ಪಣೆಕೊಟ್ಟನು.7ಯೋಸೇಫನು ತಂದೆಗೆ ಸಮಾಧಿ ಮಾಡುವುದಕ್ಕೆ ಹೊರಟಾಗ ಅವನ ಜೊತೆಯಲ್ಲಿ ಫರೋಹನ ಸೇವಕರೆಲ್ಲರೂ, ಅರಮನೆಯ ಮುಖಂಡರೆಲ್ಲರೂ, ಐಗುಪ್ತ ದೇಶದ ಮುಖ್ಯಸ್ಥರೆಲ್ಲರೂ8ಯೋಸೇಫನ ಮನೆಯವರೆಲ್ಲರೂ, ಅಣ್ಣತಮ್ಮಂದಿರೂ, ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನು ಕುರಿದನಗಳನ್ನು ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು.9ಇದಲ್ಲದೆ ಅವನ ಸಂಗಡ ರಥಗಳೂ, ಕುದುರೆಗಳೂ ಸಹ ಹೋದವು. ಯೋಸೇಫನ ಹಿಂದೆ ಹೊರಟು ಹೋದವರು ಬಹು ಮಂದಿಯಾಗಿದ್ದರು.10ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.11ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ << ಆಬೇಲ್ ಮಿಚ್ರಯಿಮ್>> ಎಂದು ಹೆಸರಾಯಿತು.12ಯಾಕೋಬನ ಮಕ್ಕಳು ತಂದೆಯ ಅಪ್ಪಣೆಯ ಮೇರೆಗೆ ಮಾಡಿದರು.13ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.14ತಂದೆಗೆ ಸಮಾಧಿ ಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ತಂದೆಯ ಉತ್ತರ ಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು.ಯೋಸೇಫನು ತನ್ನ ಸಹೋದರರನ್ನು ಕ್ಷಮಿಸಿದ್ದು
15ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, <<ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.16ಅವರು ಯೋಸೇಫನಿಗೆ, ನಿನ್ನ ತಂದೆಯು ಸಾಯುವುದಕ್ಕಿಂತ ಮೊದಲು ನಮಗೆ ಅಪ್ಪಣೆ ಮಾಡಿದ್ದೇನೆಂದರೆ,17<<ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ. ಆದರೂ ನಮ್ಮ ತಂದೆಯ ದೇವರನ್ನು ಆರಾಧಿಸುವವರು, ಸೇವಕರೂ ಆದ ನಮ್ಮ ಅಪರಾಧವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇವೆ>> ಎಂದು ಯೋಸೇಫನ ಬಳಿ ಬೇಡಿಕೊಳ್ಳಿರಿ ಎಂದು ಹೇಳಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.18ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, <<ಇಗೋ ನಾವು ನಿನಗೆ ಗುಲಾಮರು>> ಎಂದರು.19ಯೋಸೇಫನು ಅವರಿಗೆ, <<ಹೆದರಬೇಡಿರಿ, ನಾನೇನು ದೇವರ ಸ್ಥಾನದಲ್ಲಿ ಇದ್ದೇನೋ?20ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು>> ಎಂದನು.21ಆದುದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು. ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು.ಯೋಸೇಫನ ಅಂತ್ಯ ದಿನಗಳು ಮತ್ತು ಮರಣ
22ಹೀಗೆ ಯೋಸೇಫನು, ಅವನ ತಂದೆಯ ಮನೆಯವರೂ ಐಗುಪ್ತ ದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು.23ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ಅಂದರೆ ಮೂರನೇ ತಲೆಮಾರಿನವರೆಗೂ ನೋಡಿದನು. ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಅವರೂ ಯೋಸೇಫನ ಮಡಿಲಿನಲ್ಲಿಯೇ ಬೆಳೆದರು. ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು.24ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, <<ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು>> ಎಂದು ತಿಳಿದುಕೊಳ್ಳಿರಿ.25ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, <<ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು>> ಎಂದು ಅವರಿಂದ ಪ್ರಮಾಣಮಾಡಿಸಿದನು.26ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.
ವಿಮೋಚನಕಾಂಡ
1ಐಗುಪ್ತ ದೇಶದಲ್ಲಿ ಇಸ್ರಾಯೇಲರು ಹಿಂಸಿಸಲ್ಪಟ್ಟರು
1ಯಾಕೋಬನೊಂದಿಗೆ ಐಗುಪ್ತದೇಶಕ್ಕೆ ತಮ್ಮತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲರ ಮಕ್ಕಳ ಹೆಸರುಗಳು:2ರೂಬೇನ್, ಸಿಮೆಯೋನ್, ಲೇವಿ, ಯೆಹೂದ,3ಇಸ್ಸಾಕಾರ್, ಜೆಬುಲೂನ್ ಮತ್ತು ಬೆನ್ಯಾಮೀನ್,4ದಾನ್, ಗಾದ್, ನಫ್ತಾಲಿ ಮತ್ತು ಆಶೇರ್.5ಯಾಕೋಬನ ಎಲ್ಲಾ ಸಂತತಿಯವರು ಒಟ್ಟು ಎಪ್ಪತ್ತು ಮಂದಿ. ಆದರೆ ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು.6ಆ ನಂತರ ಯೋಸೇಫನೂ, ಅವನ ಅಣ್ಣತಮ್ಮಂದಿರೂ, ಆ ಸಂತತಿಯವರೆಲ್ಲರೂ ಮರಣ ಹೊಂದಿದರು.7ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು.8ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.9ಅರಸನು ತನ್ನ ಜನರಿಗೆ, <<ಇಸ್ರಾಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ನಮಗಿಂತ ಬಹಳ ಬಲಶಾಲಿಗಳೂ ಆಗಿದ್ದಾರೆ ನೋಡಿರಿ.10ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ>> ಎಂದು ಹೇಳಿ11ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.12ಐಗುಪ್ತರು ಇಸ್ರಾಯೇಲರನ್ನು ಉಪದ್ರವಪಡಿಸಿದಷ್ಟೂ, ಅವರು ಬಹಳವಾಗಿ ಹೆಚ್ಚಿ ಹರಡಿಕೊಂಡಿದ್ದರಿಂದ ಐಗುಪ್ತರು ಇಸ್ರಾಯೇಲರ ವಿಷಯದಲ್ಲಿ ಬಹಳ ಹೆದರಿಕೆಯುಳ್ಳವರಾದರು.13ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು.14ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.15ಇದಲ್ಲದೆ ಐಗುಪ್ತ ದೇಶದ ಅರಸನು <<ಶಿಪ್ರಾ>> ಮತ್ತು <<ಪೂಗಾ>> ಎಂಬ ಹೆಸರಿನ ಇಬ್ರಿಯ ಸೂಲಗಿತ್ತಿಯರೊಂದಿಗೆ ಮಾತನಾಡಿದನು.16ಅವನು ಅವರಿಗೆ, <<ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ>> ಎಂದು ಹೇಳಿದನು.17ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.18ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, <<ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?>> ಎಂದು ಕೇಳಿದನು.19ಸೂಲಗಿತ್ತಿಯರು ಫರೋಹನಿಗೆ, <<ಇಬ್ರಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತೆ ಅಲ್ಲ, ಅವರು ಬಹು ಚುರುಕು ಬುದ್ಧಿಯವರು. ಸೂಲಗಿತ್ತಿಯು ಅವರ ಹತ್ತಿರ ಬರುವುದಕ್ಕೆ ಮೊದಲೇ ಮಗುವನ್ನು ಹೆರುತ್ತಿದ್ದರು>> ಎಂದು ಹೇಳಿದರು.20ಆದ್ದರಿಂದ ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದನು. ಇದರಿಂದ ಇಸ್ರಾಯೇಲ್ ಜನರು ಹೆಚ್ಚಾಗಿ ಬಹಳ ಬಲಗೊಂಡರು.21ಸೂಲಗಿತ್ತಿಯರು ದೇವರಿಗೆ ಭಯಪಟ್ಟಿದ್ದರಿಂದ, ಆತನು ಅವರಿಗೆ ವಂಶಾಭಿವೃದ್ಧಿಯನ್ನು ಅನುಗ್ರಹಿಸಿದನು. ಇಸ್ರಾಯೇಲರು ಹೆಚ್ಚಿ ಬಲಗೊಂಡರು.22ತರುವಾಯ ಫರೋಹನು ತನ್ನ ಜನರಿಗೆ, <<ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು>> ಎಂದು ಆಜ್ಞೆ ಮಾಡಿದನು.
2ಮೋಶೆಯ ಜನನ ಮತ್ತು ಬಾಲ್ಯ
1ಆ ನಂತರ ಲೇವಿಯ ವಂಶದವನಾದ ಒಬ್ಬನು ಲೇವಿ ಕುಲದ ಕನ್ಯೆಯನ್ನು ಮದುವೆ ಮಾಡಿಕೊಂಡನು.2ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದು ಸುಂದರವಾದ ಕೂಸೆಂದು ತಿಳಿದು ಮೂರು ತಿಂಗಳು ಅದನ್ನು ಬಚ್ಚಿಟ್ಟಳು.3ಆಕೆ ಅದನ್ನು ಇನ್ನು ಹೆಚ್ಚುಕಾಲ ಮರೆಮಾಡಲಾಗದೆ, ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿ ಇಟ್ಟಳು.4ಕೂಸಿಗೆ ಏನಾಗುವುದೆಂದು ತಿಳಿದುಕೊಳ್ಳುವುದಕ್ಕೆ, ಆ ಕೂಸಿನ ಅಕ್ಕ ಸ್ವಲ್ಪ ದೂರದಲ್ಲಿ ನಿಂತುಕೊಂಡಳು.5ಅಷ್ಟರಲ್ಲಿ ಫರೋಹನ ಮಗಳು ಸ್ನಾನಕ್ಕಾಗಿ ನೈಲ್ ನದಿಯ ಬಳಿಗೆ ಬಂದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ಪೆಟ್ಟಿಗೆಯನ್ನು ಕಂಡು, ದಾಸಿಯೊಬ್ಬಳನ್ನು ಕಳುಹಿಸಿ ಅದನ್ನು ತರಿಸಿದಳು.6ಪೆಟ್ಟಿಗೆಯನ್ನು ತೆರೆದು ನೋಡುವಾಗ, ಆಹಾ! ಅಳುವ ಕೂಸು. ಆಕೆಗೆ ಅದರ ಮೇಲೆ ಕನಿಕರಹುಟ್ಟಿ, <<ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿರಬಹುದು>> ಎಂದುಕೊಂಡಳು.7ಆಗಲೇ ಮಗುವಿನ ಅಕ್ಕ ಬಂದು, <<ಫರೋಹನ ಮಗಳಿಗೆ ನಿನಗೋಸ್ಕರ ಈ ಕೂಸನ್ನು ಮೊಲೆಕೊಟ್ಟು ಸಾಕುವುದಕ್ಕೆ ಇಬ್ರಿಯ ಸ್ತ್ರೀಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೋ?>> ಎಂದು ಕೇಳಿದಳು.8ಫರೋಹನ ಮಗಳು ಆಕೆಗೆ, <<ಹೋಗು ಕರೆದುಕೊಂಡು ಬಾ>> ಎಂದಳು. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರೆದುತಂದಳು.9ಫರೋಹನ ಮಗಳು ಮಗುವಿನ ತಾಯಿಗೆ, <<ನೀನು ಈ ಮಗುವನ್ನು ತೆಗೆದುಕೊಂಡು ಹೋಗಿ ನನಗೋಸ್ಕರ ಹಾಲುಕೊಟ್ಟು ಸಾಕಬೇಕು. ನಾನು ನಿನಗೆ ಸಂಬಳವನ್ನು ಕೊಡುವೆನು>> ಎಂದು ಹೇಳಿದಳು. ಆ ಸ್ತ್ರೀಯು ಕೂಸನ್ನು ತೆಗೆದುಕೊಂಡು ಹೋಗಿ ಸಾಕಿದಳು.10ಆ ಹುಡುಗನು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಬಂದಳು, ಅವನು ಆಕೆಗೆ ಮಗನಾದನು. <<ಇವನನ್ನು ನೀರಿನೊಳಗಿನಿಂದ ಎಳೆದುಕೊಂಡಿದ್ದೇನೆ,>> ಎಂದು ಹೇಳಿ ಆಕೆಯು ಅವನಿಗೆ <<ಮೋಶೆ >> ಎಂದು ಹೆಸರಿಟ್ಟಳು.ಮೋಶೆಯು ಮಿದ್ಯಾನ್ ದೇಶಕ್ಕೆ ಓಡಿಹೋದದ್ದು
11ಮೋಶೆಯು ದೊಡ್ಡವನಾದ ಮೇಲೆ, ಸ್ವಜನರ ಬಳಿಗೆ ಹೋಗಿ ಅವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಆಗ ಒಬ್ಬ ಐಗುಪ್ತ್ಯದವನು ತನ್ನ ಸ್ವಂತ ಜನರಾದ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಹೊಡೆಯುವುದನ್ನು ಕಂಡನು.12ಮೋಶೆ ಅತ್ತಿತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು, ಆ ಐಗುಪ್ತ್ಯದವನನ್ನು ಹೊಡೆದು ಕೊಂದುಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಹಾಕಿದನು.13ಮರುದಿನ ಅವನು ಮತ್ತೆ ಹೊರಗೆ ಹೋದಾಗ, ಇಬ್ರಿಯರಾದ ಇಬ್ಬರು ಜಗಳವಾಡುತ್ತಿದ್ದರು. ಅನ್ಯಾಯಮಾಡುತ್ತಿದ್ದವನಿಗೆ ಅವನು, <<ಏನಯ್ಯಾ, ನೀನು ಯಾಕೆ ಸ್ವಕುಲದವರನ್ನು ಹೊಡೆಯುತ್ತೀ?>> ಎಂದು ಕೇಳಿದನು.14ಆ ಮನುಷ್ಯನು ಅವನಿಗೆ, <<ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?>> ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, <<ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ>> ಅಂದುಕೊಂಡನು.15ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ, ಅವನು ಮೋಶೆಯನ್ನು ಕೊಲ್ಲಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆಯು ಫರೋಹನ ಬಳಿಯಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದ ಒಂದು ಬಾವಿಯ ಬಳಿಯಲ್ಲಿ ಕುಳಿತುಕೊಂಡನು.16ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು.17ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲು, ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರನ್ನು ಕುಡಿಸಿದನು.18ಆ ನಂತರ ಆ ಹೆಣ್ಣುಮಕ್ಕಳು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ, <<ಏಕೆ ಈ ಹೊತ್ತು ಬೇಗ ಬಂದಿದ್ದಿರಲ್ಲ?>> ಎಂದು ಕೇಳಿದನು.19ಅದಕ್ಕೆ ಅವರು, <<ಐಗುಪ್ತದವನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಯಿಂದ ತಪ್ಪಿಸಿದಲ್ಲದೆ, ಅವನು ನಮಗೋಸ್ಕರ ನೀರು ಸೇದಿ ಕುರಿಗಳಿಗೆ ಕುಡಿಸಿದನು>> ಅಂದರು.20ಆಗ ಅವನು ತನ್ನ ಮಕ್ಕಳಿಗೆ, <<ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ>> ಎಂದು ಹೇಳಿದನು.21ಮೋಶೆಯು ಆ ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು.22ಆಕೆ ಗಂಡು ಮಗುವನ್ನು ಹೆರಲು ಮೋಶೆ ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.ದೇವರು ಇಸ್ರಾಯೇಲರನ್ನು ಬಿಡಿಸುವುದಕ್ಕೆ ಮೋಶೆಯನ್ನು ನೇಮಿಸಿದ್ದು
23ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.24ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.25ದೇವರು ಇಸ್ರಾಯೇಲರನ್ನು ನೋಡಿ ಅವರ ವಿಷಯದಲ್ಲಿ ಕನಿಕರಪಟ್ಟನು.
3ಮೋಶೆಯು - ಉರಿಯುತ್ತಿರುವ ಪೊದೆಯು
1ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, <<ಹೋರೇಬ್>> ಎಂಬ ದೇವರ ಬೆಟ್ಟಕ್ಕೆ ಬಂದನು.2ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ.3ಆಗ ಮೋಶೆ, <<ಇದೇನು ಆಶ್ಚರ್ಯ! ಪೊದೆಯು ಸುಟ್ಟು ಹೋಗುತ್ತಿಲ್ಲವಲ್ಲಾ! ಇದನ್ನು ಹತ್ತಿರಕ್ಕೆ ಹೋಗಿ ನೋಡುವೆನು>> ಅಂದುಕೊಂಡನು.4ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ <<ಮೋಶೆಯೇ, ಮೋಶೆಯೇ>> ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, <<ಇಗೋ ಇದ್ದೇನೆ>> ಅಂದನು.5ದೇವರು ಅವನಿಗೆ, <<ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ>> ಎಂದು ಹೇಳಿದನು.6ಇದಲ್ಲದೆ ಆತನು ಅವನಿಗೆ, <<ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ>> ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.7ಆಗ ಯೆಹೋವನು, <<ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.9ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.10ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ>> ಅಂದನು.11ಆಗ ಮೋಶೆಯು ದೇವರಿಗೆ, <<ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?>> ಎಂದು ಹೇಳಿದನು.12ಅದಕ್ಕೆ ದೇವರು, <<ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು>> ಅಂದನು.ದೇವರು ತನ್ನ ಹೆಸರನ್ನು ಪ್ರಕಟಿಸಿದ್ದು
13ಅದಕ್ಕೆ ಮೋಶೆಯು ದೇವರಿಗೆ, <<ನಾನು ಇಸ್ರಾಯೇಲರ ಬಳಿಗೆ ಹೋಗಿ, <ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ> ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು>> ಎಂದನು.14ದೇವರು ಮೋಶೆಗೆ, <<ಇರುವಾತನೇ ಆಗಿದ್ದೇನೆ>> ಎಂದು ಹೇಳಿದನು. <<ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು>> ಅಂದನು.15ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, <<ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ>> ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.16ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, <<ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ.17ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ>> ಎಂಬುದಾಗಿ ಅವರಿಗೆ ಹೇಳು.18ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, <<ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು>> ಎಂದು ಕೇಳಿಕೊಳ್ಳಿರಿ.19ಆ ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ.20ಆದಕಾರಣ ನಾನು ನನ್ನ ಕೈಯನ್ನು ಚಾಚಿ ಐಗುಪ್ತ ದೇಶದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು. ಅನಂತರ ಅರಸನು ನಿಮ್ಮನ್ನು ಕಳುಹಿಸಿಕೊಡುವನು.21<<ಇದಲ್ಲದೆ ಈ ನನ್ನ ಜನರ ಮೇಲೆ ಐಗುಪ್ತ್ಯರಿಗೆ ದಯೆಯುಂಟಾಗುವಂತೆ ಮಾಡುವೆನು. ಆದ್ದರಿಂದ ನೀವು ಹೊರಡುವಾಗ ಬರಿಗೈಯಲ್ಲಿ ಬರಬೇಕಾಗುವುದಿಲ್ಲ.22ನಿಮ್ಮಲ್ಲಿನ ಪ್ರತಿಯೊಬ್ಬ ಸ್ತ್ರೀಯು ನೆರೆಹೊರೆಯ ಹೆಂಗಸರಿಂದಲೂ, ನಿಮ್ಮ ಮನೆಗಳ ಅತಿಥಿಗಳಾಗಿ ತಂಗಿರುವ ಹೆಂಗಸರಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ, ಬಟ್ಟೆಗಳನ್ನೂ ಕೇಳಿಕೊಳ್ಳಲಿ. ನೀವು ಅವುಗಳನ್ನು ನಿಮ್ಮ ಗಂಡು ಹೆಣ್ಣು ಮಕ್ಕಳಿಗೆ ತೊಡಿಸಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲಿಗೆ ಮಾಡಿಹೊರಟು ಬರುವಿರಿ>> ಅಂದನು.
4ದೇವರು ಮೋಶೆಗೆ ಕೊಟ್ಟ ಅದ್ಭುತ ಶಕ್ತಿ
1ಅದಕ್ಕೆ ಮೋಶೆಯು ಉತ್ತರವಾಗಿ, <<ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?>> ಎಂದನು.2ಅದಕ್ಕೆ ಯೆಹೋವನು ಅವನಿಗೆ, <<ನಿನ್ನ ಕೈಯಲ್ಲಿರುವುದೇನು?>> ಎಂದು ಕೇಳಿದನು. ಅವನು, ಇದು <<ಇದು ಒಂದು ಕೋಲು>> ಅಂದನು.3ಯೆಹೋವನು ಅವನಿಗೆ, <<ಅದನ್ನು ನೆಲದ ಮೇಲೆ ಹಾಕು>> ಎಂದನು. ಅವನು ನೆಲದಲ್ಲಿ ಹಾಕುತ್ತಲೇ ಅದು ಹಾವಾಯಿತು! ಮೋಶೆ ಅದಕ್ಕೆ ಭಯಪಟ್ಟು ಓಡಿಹೋದನು.4ಯೆಹೋವನು ಮೋಶೆಗೆ, <<ನಿನ್ನ ಕೈಚಾಚಿ ಅದರ ಬಾಲವನ್ನು ಹಿಡಿ>> ಎಂದು ಹೇಳಿದನು. ಅವನು ಅದನ್ನು ಹಿಡಿದ ಕೂಡಲೇ ಅದು ಕೋಲಾಯಿತು.5ಆಗ ಯೆಹೋವನು ಅವನಿಗೆ, <<ಇದರಿಂದ ಅವರು ತಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು, ನಿನಗೆ ಕಾಣಿಸಿಕೊಂಡಿರುವುದು ನಿಜ ಎಂದು ನಂಬುವರು>> ಎಂದು ಹೇಳಿದನು.6ಯೆಹೋವನು ತಿರುಗಿ ಅವನಿಗೆ, <<ನಿನ್ನ ಕೈಯನ್ನು ಎದೆಯಭಾಗದೊಳಗೆ ಇಟ್ಟುಕೋ>> ಎಂದು ಹೇಳಿದನು. ಅವನು ಹಾಗೆ ಇಟ್ಟುಕೊಂಡು ಹೊರಗೆ ತೆಗೆಯಲು ಅವನ ಕೈ ಕುಷ್ಠ ಹತ್ತಿ ಹಿಮದಂತೆ ಬೆಳ್ಳಗಾಗಿತ್ತು.7ಯೆಹೋವನು ಅವನಿಗೆ ನಿನ್ನ ಕೈಯನ್ನು ತಿರುಗಿ ಎದೆಯಭಾಗದೊಳಗೆ <<ಸೇರಿಸು>> ಎಂದು ಹೇಳಿದನು. ಅವನು ಅದನ್ನು ತಿರುಗಿ ಎದೆಯಭಾಗದೊಳಗೆ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ದೇಹದಂತೆ ಆಗಿತ್ತು.8ಆಗ ಯೆಹೋವನು ಅವನಿಗೆ, <<ಅವರು ನಿನ್ನನ್ನು ನಂಬದೆ, ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ತಿರಸ್ಕರಿಸಿದರೂ, ಎರಡನೆಯ ಸೂಚಕಕಾರ್ಯವನ್ನು ನಂಬುವರು.9ಆ ಎರಡು ಸೂಚಕಕಾರ್ಯಗಳನ್ನೂ, ಅವರು ನಂಬದೆಯೂ, ನಿನ್ನ ಮಾತನ್ನು ಕೇಳದೆಯೂ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದುಕೊಂಡು ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ಒಣಗಿದ ನೆಲದಲ್ಲಿ ಸುರಿದ ನೀರು ರಕ್ತವಾಗುವುದು>> ಎಂದು ಹೇಳಿದನು.10ಆಗ ಮೋಶೆಯು ಯೆಹೋವನಿಗೆ, <<ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ>> ಎಂದು ಹೇಳಿದನು.11ಅದಕ್ಕೆ ಯೆಹೋವನು ಅವನಿಗೆ, <<ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?12ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ, ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು>> ಎಂದು ಹೇಳಿದನು.13ಅದಕ್ಕೆ ಮೋಶೆಯು, <<ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು>> ಎಂದನು.14ಆಗ ಯೆಹೋವನು ಮೋಶೆಯ ಮೇಲೆ ಕೋಪಗೊಂಡು ಅವನಿಗೆ, <<ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲವನೆಂದು ನನಗೆ ತಿಳಿದಿದೆ. ಅವನೇ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿದಾಗ ಅವನು ತನ್ನ ಹೃದಯದಲ್ಲಿ ಸಂತೋಷಿಸುವನು.15ನೀನು ಅವನ ಸಂಗಡ ಮಾತನಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಿಕೊಡು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.16ಅವನು ನಿನಗೆ ಬದಲಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತಿರುವಿ.17ಇದಲ್ಲದೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಹೋಗಬೇಕು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ>> ಅಂದನು.ಮೋಶೆ ಐಗುಪ್ತದೇಶಕ್ಕೆ ಮರಳಿ ಬಂದದ್ದು
18ಆಗ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, <<ನಾನು ಐಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು>> ಎಂದನು. ಇತ್ರೋನನು ಮೋಶೆಗೆ, <<ನೀನು ಸಮಾಧಾನದಿಂದ ಹೋಗು>> ಅಂದನು.19ಯೆಹೋವನು ಮಿದ್ಯಾನಿನಲ್ಲಿ ಮೋಶೆಗೆ, ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗು. ನಿನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದವರೆಲ್ಲರೂ ಸತ್ತು ಹೋದರು ಎಂದನು.20ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಕುಳ್ಳಿರಿಸಿ ಅವರನ್ನು ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಜೊತೆಯಲ್ಲಿ ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು.21ಯೆಹೋವನು ಮೋಶೆಗೆ ಇಂತೆಂದನು, <<ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.22ಆಗ ನೀನು ಫರೋಹನಿಗೆ, <ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.23ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ> >> ಎಂದು ತಿಳಿಸಬೇಕು.24ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ, ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು.25ಹೀಗಿರುವಾಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿದಳು. ನಂತರ ಅವಳು, <<ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು>> ಎಂದಳು.26ಆಗ ಯೆಹೋವನು ಅವನನ್ನು ಉಳಿಸಿದನು. ಆಗ ಅವಳು, <<ಸುನ್ನತಿಯ ನಿಮಿತ್ತವೇ ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು>> ಎಂಬ ಮಾತನ್ನು ಹೇಳಿದಳು.27ಇದಲ್ಲದೆ ಯೆಹೋವನು ಆರೋನನಿಗೆ, <<ನೀನು ಮೋಶೆಯನ್ನು ಎದುರುಗೊಳ್ಳುವುದಕ್ಕೆ ಮರುಭೂಮಿಗೆ ಹೊರಟುಹೋಗು>> ಎಂದನು. ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು.28ಆಗ ಮೋಶೆಯು ಆರೋನನಿಗೆ, ತನ್ನನ್ನು ಕಳುಹಿಸಿದ ಯೆಹೋವನ ಎಲ್ಲಾ ಮಾತುಗಳನ್ನೂ, ತನಗೆ ಆಜ್ಞಾಪಿಸಿದ ಸೂಚಕಕಾರ್ಯಗಳನ್ನೂ, ತಾನು ಮಾಡಿದವುಗಳನ್ನೆಲ್ಲಾ ಆರೋನನಿಗೆ ತಿಳಿಸಿದನು.29ತರುವಾಯ ಮೋಶೆ ಮತ್ತು ಆರೋನರು ಹೋಗಿ ಇಸ್ರಾಯೇಲ್ಯರ ಹಿರಿಯರನ್ನೆಲ್ಲಾ ಒಟ್ಟಿಗೆ ಸೇರಿಸಿದರು.30ಯೆಹೋವನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಅವರಿಗೆ ತಿಳಿಸಿ ಜನರ ಕಣ್ಣುಗಳ ಮುಂದೆ ಸೂಚಕಕಾರ್ಯಗಳನ್ನು ಮಾಡಿದನು.31ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
5ಫರೋಹನ ಮಂದೆ ಮೋಶೆ ಮತ್ತು ಆರೋನರು
1ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, <<ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ>> ಅಂದರು.2ಅದಕ್ಕೆ ಫರೋಹನು, <<ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ>> ಅಂದನು.3ಆಗ ಅವರು, <<ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು>> ಎಂದು ಹೇಳಿದರು.4ಐಗುಪ್ತರ ಅರಸನು ಅವರಿಗೆ, <<ಮೋಶೆ ಮತ್ತು ಆರೋನರೇ, ಈ ಜನರು ತಮ್ಮ ಕೆಲಸವನ್ನು ಮಾಡದಂತೆ ಯಾಕೆ ಅಡ್ಡಿ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಕ್ಕೆ ಹೋಗಿರಿ>> ಎಂದು ಹೇಳಿದನು.5ಫರೋಹನು, <<ಇಬ್ರಿಯರು ದೇಶದಲ್ಲಿ ಹೆಚ್ಚಾಗಿದ್ದಾರೆ. ಅವರು ತಮ್ಮ ಬಿಟ್ಟೀ ಕೆಲಸಗಳನ್ನು ಮಾಡದಂತೆ ನಿಲ್ಲಿಸಿ ಬಿಡುತ್ತಿದ್ದೀರಲ್ಲಾ?>> ಎಂದನು.6ಆ ದಿನದಲ್ಲಿ ಫರೋಹನು ಬಿಟ್ಟೀಮಾಡಿಸುವವರನ್ನು ಮತ್ತು ಅವರ ಅಧಿಕಾರಿಗಳನ್ನು ಕರೆಯಿಸಿ,7<<ಇನ್ನು ಮೇಲೆ ನೀವು ಆ ಜನರಿಗೆ ಇಟ್ಟಿಗೆ ಮಾಡುವುದಕ್ಕೆ ಹುಲ್ಲನ್ನು ಕೊಡಬಾರದು. ಅವರೇ ಹೋಗಿ ಹುಲ್ಲನ್ನು ಶೇಖರಿಸಿಕೊಳ್ಳಲಿ,8ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, <ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು> ಎಂದು ಕೂಗಿಕೊಳ್ಳುತ್ತಿದ್ದಾರೆ.9ಈ ಜನರು ವ್ಯರ್ಥವಾದ ಮಾತುಗಳಿಗೆ ಗಮನ ಕೊಡದಂತೆ ನೀವು ಅವರ ಮೇಲೆ ಹೆಚ್ಚು ಕೆಲಸವನ್ನು ಹೊರಿಸಿರಿ. ಅವರು ದುಡಿಯಲಿ>> ಎಂದು ಆಜ್ಞಾಪಿಸಿದನು.ಐಗುಪ್ತ್ಯರು ಇಸ್ರಾಯೇಲರನ್ನು ಹೆಚ್ಚಾಗಿ ಬಾಧಿಸಿದ್ದು
10ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಮತ್ತು ಅಧಿಕಾರಿಗಳೂ ಹೊರಗೆ ಹೋಗಿ ಆ ಜನರಿಗೆ, <<ನಿಮಗೆ ಹುಲ್ಲನ್ನು ಕೊಡಬಾರದೆಂದು ಫರೋಹನ ಅಪ್ಪಣೆಯಾಗಿದೆ.11ನಿಮಗೆ ಹುಲ್ಲು ಎಲ್ಲಿ ದೊರಕುವುದೋ ಅಲ್ಲಿಗೆ ನೀವೇ ಹೋಗಿ ತೆಗೆದುಕೊಳ್ಳಿರಿ. ಆದರೂ ನೀವು ಮಾಡಬೇಕಾದ ಕೆಲಸದಲ್ಲಿ ಸ್ವಲ್ಪವೂ ಕಡಿಮೆಯಾಗಬಾರದು>> ಎಂದು ಹೇಳಿದರು.12ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.13ಇದಲ್ಲದೆ ಬಿಟ್ಟೀ ಕೆಲಸ ಮಾಡಿಸುವವರು, <<ನಿಮಗೆ ಹುಲ್ಲು ಇದ್ದಾಗ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಅದೇ ದಿನದಲ್ಲೇ ಮುಗಿಸಬೇಕು>> ಎಂದು ಹೇಳಿ ಅವರನ್ನು ಅವಸರ ಪಡಿಸಿದರು.14ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, <<ನೀವು ಮೊದಲು ಇಟ್ಟಿಗೆಗಳ ಲೆಕ್ಕ ಒಪ್ಪಿಸುತ್ತಿದ್ದಂತೆ ನಿನ್ನೆ ಹಾಗೂ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ>> ಎಂದು ಹೇಳಿ ಅವರನ್ನು ಹೊಡೆದರು.15ಹೀಗಿರಲು ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, <<ಏಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತಿರುವಿರಿ ಸ್ವಾಮೀ?16ನಿನ್ನ ದಾಸರಿಗೆ, ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ <ಇಟ್ಟಿಗೆಗಳನ್ನು ಮಾಡಿರಿ!> ಎಂದು ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಹೀಗೆ ನಿನ್ನ ಜನರು ಮಾಡುತ್ತಿರುವುದು ಪಾಪಕಾರ್ಯವಾಗಿದೆ>> ಎಂದು ಗೋಳಾಡಿದರು.17ಅದಕ್ಕೆ ಅವನು, <<ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, <ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು> ಎಂದು ಹೇಳುತ್ತಿದ್ದೀರಿ.18ಆದ್ದರಿಂದ ಈಗ ಕೆಲಸಕ್ಕೆ ನಡೆಯಿರಿ ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೂ ನೇಮಿಸಿದ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಬೇಕು>> ಅಂದನು.19ದಿನ ದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂಬ ಅಪ್ಪಣೆಯಾಗಿದ್ದರಿಂದ ಇಸ್ರಾಯೇಲರ ಮೇಲ್ವಿಚಾರಕರು ತಾವು ದುರವಸ್ಥೆಯಲ್ಲಿ ಸಿಕ್ಕಿಕೊಂಡಿವೆಂದು ತಿಳಿದುಕೊಂಡರು.20ಅವರು ಫರೋಹನ ಬಳಿಯಿಂದ ಹೊರಗೆ ಬಂದಾಗ ತಮ್ಮನ್ನು ಎದುರುಗೊಳ್ಳುವುದಕ್ಕೆ ನಿಂತಿದ್ದ ಮೋಶೆ ಮತ್ತು ಆರೋನರನ್ನು ನೋಡಿ21ಮೋಶೆ ಹಾಗು ಆರೋನರಿಗೆ, <<ಯೆಹೋವನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ. ಏಕೆಂದರೆ ಫರೋಹನು ಮತ್ತು ಅವನ ಸೇವಕರೂ ನಮ್ಮನ್ನು ನೋಡಿ ಅಸಹ್ಯಪಡುವಂತೆ ನೀವು ಮಾಡಿರುವಿರಿ. ನಮ್ಮನ್ನು ಸಂಹಾರಮಾಡುವುದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟಿದ್ದೀರಿ>> ಅಂದರು. <<ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ>> ಎಂದು ಹೇಳಿದರು.ದೇವರು ಮೋಶೆಯನ್ನು ಧೈರ್ಯಪಡಿಸಿದ್ದು
22ಆಗ ಮೋಶೆಯು ಯೆಹೋವನ ಬಳಿಗೆ ಹಿಂತಿರುಗಿ ಬಂದು, <<ಸ್ವಾಮೀ, ಈ ಜನರಿಗೆ ಕೇಡನ್ನು ಮಾಡಿದ್ದೀಯಲ್ಲಾ? ನನ್ನನ್ನು ಕಳುಹಿಸಿದ್ದು ಯಾಕೆ?23ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲಿಲ್ಲವಲ್ಲ>> ಎಂದು ಹೇಳಿದನು.
6ಯೆಹೋವನು ಇಸ್ರಾಯೇಲರನ್ನು ಬಿಡುಗಡೆಗೊಳಿಸುವುದಾಗಿ ವಾಗ್ದಾನವನ್ನು ಮಾಡಿದ್ದು
1ಆನಂತರ ಯೆಹೋವನು ಮೋಶೆಗೆ, <<ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು>> ಅಂದನು.2ದೇವರು ಮೋಶೆಯ ಸಂಗಡ ಪುನಃ ಮಾತನಾಡಿ ಇಂತೆಂದನು, <<ನಾನೇ ಯೆಹೋವನು,3ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.4ನಾನು ಅವರಿಗೆ ಕಾನಾನ್ ದೇಶವನ್ನು ಅಂದರೆ, ಅವರು ಪರದೇಶದವರಾಗಿ ವಾಸವಾಗಿದ್ದ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ಮಾಡಿಕೊಂಡಿರುವೆನು.5ಐಗುಪ್ತರು ದಾಸರಾಗಿ ಮಾಡಿಕೊಂಡಿರುವ ಇಸ್ರಾಯೇಲರ ಗೋಳು ಈಗ ನನಗೆ ಕೇಳಿಸಿತು. ನಾನು ಮಾಡಿದ ವಾಗ್ದಾನವನ್ನು ಪುನಃ ನೆನಪುಮಾಡಿಕೊಂಡೆನು.6ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, <ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.7ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.8ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ> ಎಂದು ಅವರಿಗೆ ಹೇಳು>> ಅಂದನು.9ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ.10ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ,11<<ನೀನು ಐಗುಪ್ತ್ಯರ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಟು ಹೋಗುವಂತೆ ಅವನ ಸಂಗಡ ಮಾತನಾಡು>> ಅಂದನು.12ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, <<ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?>> ಅಂದನು.13ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು.ಮೋಶೆ ಮತ್ತು ಆರೋನರ ವಂಶಾವಳಿ
14ಇಸ್ರಾಯೇಲ್ ಗೋತ್ರಗಳ ಕುಟುಂಬಗಳ ಮುಖ್ಯಸ್ಥರು: ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲು, ಹೆಚ್ರೋನ್, ಕರ್ಮೀ. ಇವರೇ ರೂಬೇನಿನಿಂದ ಉಂಟಾದ ಗೋತ್ರಗಳ ಮೂಲ ಪುರುಷರು.15ಸಿಮೆಯೋನನ ಮಕ್ಕಳಾದ; ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ ಇವರು ಸಿಮೆಯೋನನಿಂದುಂಟಾದ ಗೋತ್ರಗಳಿಗೆ ಮೂಲ ಪುರುಷರು.16ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.17ಗೋತ್ರಗಳಿಗನುಸಾರವಾಗಿ ಗೇರ್ಷೋನನ ಮಕ್ಕಳು: ಲಿಬ್ನೀ ಮತ್ತು ಶಿಮ್ಮಿ.18ಕೊಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೆಹಾತನು ನೂರ ಮೂವತ್ತಮೂರು ವರ್ಷ ಬದುಕಿದನು.19ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ ಆಗಿದ್ದವು.20ಅಮ್ರಾಮನು ತನ್ನ ತಂದೆಯ ತಂಗಿ ಯೋಕೆಬೆದಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದನು.21ಇಚ್ಹಾರನ ಮಕ್ಕಳು ಕೋರಹ, ನೆಫೆಗ್ ಮತ್ತು ಚಿಕ್ರಿ.22ಉಜ್ಜೀಯೇಲನ ಮಕ್ಕಳು: ಮೀಷಾಯೇಲ್, ಎಲ್ಜಾಫಾನ್ ಮತ್ತು ಸಿತ್ರಿ.23ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.24ಕೋರಹನ ಮಕ್ಕಳು: ಅಸ್ಸೀರ್, ಎಲ್ಕಾನ್, ಅಬೀಯಾಸಾಫ್ ಇವರೇ ಕೋರಹೀಯರ ಗೋತ್ರಗಳು.25ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಪ್ರಕಾರ ಇವರೇ ಲೇವಿಯರ ಪೂರ್ವಿಕರು.26ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ.27ಇಸ್ರಾಯೇಲರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಐಗುಪ್ತ್ಯರ ಅರಸನಾದ ಫರೋಹನ ಸಂಗಡ ಮಾತನಾಡಿದಂತಹ ಮೋಶೆ ಮತ್ತು ಆರೋನರು ಇವರೇ.ಮೋಶೆ ಆರೋನರು ದೇವರ ಆಜ್ಞೆಗೆ ವಿಧೇಯರಾದದ್ದು
28ಯೆಹೋವನು ಐಗುಪ್ತದೇಶದಲ್ಲಿ, ಮೋಶೆಯ ಸಂಗಡ ಮಾತನಾಡಿದಾಗ29ಆತನು ಮೋಶೆಗೆ, <<ನಾನು ಯೆಹೋವನು ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಐಗುಪ್ತ್ಯರ ಅರಸನಾದ ಫರೋಹನನಿಗೆ ತಿಳಿಸು>> ಎಂದನು.30ಆದರೆ ಮೋಶೆಯು ಯೆಹೋವನಿಗೆ, <<ಇಗೋ, ಸ್ವಾಮಿ ನಾನು ಮಾತನಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು>> ಅಂದನು.
71ಆಗ ಯೆಹೋವನು ಮೋಶೆಗೆ ಇಂತೆಂದನು, <<ನಿನ್ನನ್ನು ಫರೋಹನಿಗೆ ದೇವರಂತೆ ನೇಮಿಸಿದ್ದೇನೆ. ನೋಡು, ನಿನ್ನ ಅಣ್ಣನಾದ ಆರೋನನು ನಿನಗೋಸ್ಕರ ಪ್ರವಾದಿಯಾಗಿರುವನು.2ನಾನು ನಿನಗೆ ಆಜ್ಞಾಪಿಸುವುದ್ದನ್ನೆಲ್ಲಾ ನೀನು ಹೇಳಬೇಕು. ಇಸ್ರಾಯೇಲರು ದೇಶದಿಂದ ಹೊರಟುಹೋಗುವುದಕ್ಕೆ ಅಪ್ಪಣೆಕೊಡಬೇಕೆಂಬುದಾಗಿ ನಿನ್ನ ಅಣ್ಣನಾದ ಆರೋನನೇ ಫರೋಹನ ಮುಂದೆ ಮಾತನಾಡಬೇಕು.3ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು.4ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.5ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು>> ಅಂದನು.6ಯೆಹೋವನ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು.7ಅವರು ಫರೋಹನ ಹತ್ತಿರ ಮಾತನಾಡಿದ ಕಾಲದಲ್ಲಿ ಮೋಶೆ ಎಂಬತ್ತು ವರ್ಷದವನೂ ಮತ್ತು ಆರೋನನು ಎಂಭತ್ತಮೂರು ವರ್ಷದವನೂ ಆಗಿದ್ದರು.ಆರೋನನ ಕೋಲು ಸರ್ಪವಾಗಿದ್ದು
8ಯೆಹೋವನು ಮೋಶೆ ಹಾಗೂ ಆರೋನರ ಸಂಗಡ ಮಾತನಾಡಿ,9<<ಫರೋಹನು ನಿಮಗೆ <ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು> ಎಂದು ಹೇಳಿದರೆ ಮೋಶೆಯು ಆರೋನನಿಗೆ, <ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು> ಎಂದು ಹೇಳಬೇಕು. ಅದು ಸರ್ಪವಾಗುವುದು>> ಎಂದು ಆಜ್ಞಾಪಿಸಿದನು.10ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಹಾಕಿದಾಗ ಅದು ಸರ್ಪವಾಯಿತು.11ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.12ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಹಾಕಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.13ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.ನೈಲನದಿಯ ನೀರು ರಕ್ತವಾದದ್ದು
14ಆಗ ಯೆಹೋವನು ಮೋಶೆಗೆ, <<ಫರೋಹನ ಹೃದಯವು ಕಠಿಣವಾಗಿದೆ, ತಾನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡುವುದಿಲ್ಲ ಎನ್ನುತ್ತಾನೆ.15ನೀನು ಬೆಳಿಗ್ಗೆ ಫರೋಹನ ಬಳಿಗೆ ಹೋಗು, ಅವನು ನೀರಿನ ಬಳಿಗೆ ಇಳಿದು ಬರುತ್ತಾನಲ್ಲಾ. ಸರ್ಪವಾಗಿ ಮಾರ್ಪಾಟುಮಾಡಿದ ಆ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಅವನನ್ನು ಎದುರುಗೊಳ್ಳುವುದಕ್ಕೆ ನೈಲ್ ನದಿ ತೀರದಲ್ಲಿ ನಿಂತುಕೊಂಡು ಅವನಿಗೆ ಹೀಗನ್ನಬೇಕು,16<ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ.17ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು.18ನದಿಯಲ್ಲಿರುವ ಮೀನುಗಳು ಸಾಯುವವು. ನದಿಯು ಹೊಲಸಾಗಿ ನಾರುವುದು. ಅದನ್ನು ಕುಡಿಯುವುದಕ್ಕೆ ಐಗುಪ್ತರಿಗೆ ಹೇಸಿಗೆಯಾಗುವುದು> ಎಂದು ಹೇಳಬೇಕು>> ಅಂದನು.19ಯೆಹೋವನು ಮೋಶೆಯ ಸಂಗಡ ಮಾತನಾಡಿ, <<ನೀನು ಆರೋನನಿಗೆ <ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು> ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು>> ಅಂದನು.20ಮೋಶೆ ಮತ್ತು ಆರೋನರು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು.21ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿಯು ದುರ್ವಾಸನೆಗೊಂಡಿದ್ದರಿಂದ ಐಗುಪ್ತರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಕಾಣುತಿತ್ತು.22ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು.23ಫರೋಹನು ಆ ಮಹತ್ಕಾರ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ತನ್ನ ಮನೆಗೆ ಹೊರಟುಹೋದನು.24ಐಗುಪ್ತ್ಯರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಗುಂಡಿಗಳನ್ನು ತೆಗೆದರು.25ಯೆಹೋವನು ನೈಲ್ ನದಿಯನ್ನು ಹೊಡೆದ ಮೇಲೆ ಏಳು ದಿನಗಳು ತುಂಬಿದವು.
8ಕಪ್ಪೆಗಳಿಂದ ಬಾಧೆಯುಂಟಾದದ್ದು
1ನಂತರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ, <<ನೀನು ಫರೋಹನ ಬಳಿಗೆ ಹೋಗಿ ಹೀಗೆ ಹೇಳಬೇಕು, <ಯೆಹೋವನು ಆಜ್ಞಾಪಿಸುವುದೇನೆಂದರೆ: ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರಿಗೆ ಅಪ್ಪಣೆಕೊಡಬೇಕು.2ಅಪ್ಪಣೆಕೊಡದೆ ಹೋದರೆ, ನಾನು ನಿನ್ನ ದೇಶದಲ್ಲೆಲ್ಲಾ ಕಪ್ಪೆಗಳಿಂದ ಉಪದ್ರವ ಕೊಡುವೆನು.3ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯಾತವಾಗಿ ಹುಟ್ಟುವವು. ಅವು ಹೊರಟು ಬಂದು ನಿನ್ನ ಅರಮನೆಯಲ್ಲಿಯೂ, ಮಲಗುವ ಕೋಣೆಯಲ್ಲಿಯೂ, ಮಂಚದ ಮೇಲೆಯೂ ಬರುವುದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ, ನಿನ್ನ ಪ್ರಜೆಗಳ ಮೇಲೆಯೂ, ಒಲೆಗಳಲ್ಲಿಯೂ, ಹಿಟ್ಟು ನಾದುವ ಪಾತ್ರೆಗಳಲ್ಲಿಯೂ ಬರುವವು.4ನಿನ್ನ ಮೇಲೆಯೂ, ನಿನ್ನ ಪ್ರಜೆಗಳ ಮೇಲೆಯೂ ಮತ್ತು ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.> >> ಎಂದನು.5ಯೆಹೋವನು ಪುನಃ ಮೋಶೆಯ ಸಂಗಡ ಮಾತನಾಡಿ, <<ನೀನು ಆರೋನನಿಗೆ, ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆ, ಕಾಲುವೆ, ಕೆರೆ ಇವುಗಳ ಮೇಲೆ ಅದನ್ನು ಹಿಡಿದುಕೊಂಡು ಕೈಯನ್ನು ಚಾಚು. ಆಗ ಐಗುಪ್ತ ದೇಶದ ಮೇಲೆಲ್ಲಾ ಕಪ್ಪೆಗಳು ಬರುವವು>> ಎಂದು ಹೇಳಬೇಕು ಎಂದನು.6ಆರೋನನು ಐಗುಪ್ತ ದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ತನ್ನ ಕೈಚಾಚಲು ಕಪ್ಪೆಗಳು ಹೊರಟು ಬಂದು ದೇಶವನ್ನೆಲ್ಲಾ ತುಂಬಿಕೊಂಡವು.7ಮಂತ್ರವಾದಿಗಳು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಮಾಡಿ, ಐಗುಪ್ತ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.8ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, <<ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು>> ಎಂದನು.9ಅದಕ್ಕೆ ಮೋಶೆ ಫರೋಹನಿಗೆ, <<ಈ ಕಪ್ಪೆಗಳು ನಿನ್ನ ಬಳಿಯಿಂದಲೂ, ನಿನ್ನ ಪ್ರಜೆಗಳ ಬಳಿಯಿಂದಲೂ, ನಿನ್ನ ಮನೆಗಳಿಂದಲೂ ತೊಲಗಿ ನೈಲ್ ನದಿಯಲ್ಲಿ ಮಾತ್ರ ಉಳಿಯುವಂತೆ ನಿನಗೋಸ್ಕರವೂ, ನಿನ್ನ ಪರಿವಾರದವರಿಗೋಸ್ಕರವೂ ನಾನು ಯಾವಾಗ ಬೇಡಿಕೊಳ್ಳಲಿ? ನಿನ್ನ ಚಿತ್ತಕ್ಕೆ ಸರಿ ತೋರುವಂತೆ ನೀನೇ ಅದಕ್ಕೊಂದು ಕಾಲವನ್ನು ನೇಮಿಸಬೇಕು>> ಎಂದು ಫರೋಹನನ್ನು ವಿನಂತಿಸಿಕೊಂಡನು.10ಫರೋಹನು ಮೋಶೆಗೆ, <<ನಾಳೆ>> ಎಂದನು. ಆಗ ಮೋಶೆಯು, <<ನಿನ್ನ ಮಾತಿನ ಪ್ರಕಾರವೇ ಆಗಲಿ, ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವಿ.11ಕಪ್ಪೆಗಳು ನಿನ್ನನ್ನೂ, ನಿನ್ನ ಮನೆಗಳನ್ನೂ, ನಿನ್ನ ಪ್ರಜಾಪರಿವಾರದವರನ್ನೂ ಬಿಟ್ಟು, ನೈಲ್ ನದಿಯಲ್ಲಿ ಮಾತ್ರ ಇರುವವು>> ಎಂದನು.12ಮೋಶೆ ಮತ್ತು ಆರೋನರು ಫರೋಹನ ಬಳಿಯಿಂದ ಹೊರಟು ಹೋದರು. ಆಗ ಮೋಶೆಯು ಯೆಹೋವನಿಗೆ, ನೀನು ಫರೋಹನ ಮೇಲೆ ಬರಮಾಡಿರುವ ಕಪ್ಪೆಗಳನ್ನು ತೊಲಗಿಸಬೇಕೆಂದು ಮೊರೆಯಿಟ್ಟನು.13ಯೆಹೋವನು ಮೋಶೆಯ ಮಾತಿನ ಪ್ರಕಾರವೇ ಮಾಡಿದನು. ಮನೆಗಳಲ್ಲಿಯೂ, ಅಂಗಳಗಳಲ್ಲಿಯೂ, ಬಯಲಿನಲ್ಲಿಯೂ ಇದ್ದ ಕಪ್ಪೆಗಳು ಸತ್ತುಹೋದವು.14ಜನರು ಅವುಗಳನ್ನು ರಾಶಿ ರಾಶಿಯಾಗಿ ಕೂಡಿಸಿದರು. ದೇಶವೆಲ್ಲಾ ದುರ್ವಾಸನೆಯಿಂದ ತುಂಬಿಹೋಯಿತು.15ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.ಹೇನುಗಳ ಬಾಧೆ
16ತರುವಾಯ ಯೆಹೋವನು ಮೋಶೆಯ ಸಂಗಡ ಮಾತನಾಡಿ, <<ನೀನು ಆರೋನನಿಗೆ, <ನಿನ್ನ ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳೆಲ್ಲಾ ಹೇನುಗಳಾಗುವುದು> >> ಎಂದನು.17ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಹಿಡಿದುಕೊಂಡು ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹೇನುಗಳು ಬಂದವು. ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.18ಮಂತ್ರಗಾರರು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡುವುದಕ್ಕೆ ಪ್ರಯತ್ನಿಸಿದರೂ ಆಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಇದ್ದವು.19ಆಗ ಆ ಮಂತ್ರಗಾರರು ಫರೋಹನಿಗೆ, <<ಇದು ದೇವರ ಕೈಕೆಲಸವೇ ಸರಿ>> ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.ನೊಣಗಳ ಬಾಧೆ
20ತರುವಾಯ ಯೆಹೋವನು ಮೋಶೆಗೆ, <<ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು, <ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.21ಆದರೆ ನೀನು, ನನ್ನ ಜನರಿಗೆ ಅಪ್ಪಣೆಕೊಡದೇ ಹೋದರೆ, ನಾನು ನಿನಗೂ, ನಿನ್ನ ಪರಿವಾರದವರಿಗೂ, ನಿನ್ನ ಮನೆಗಳಿಗೂ ನೊಣಗಳ ಕಾಟವುಂಟಾಗುವಂತೆ ಮಾಡುವೆನು. ಐಗುಪ್ತ್ಯರ ಮನೆಗಳಲ್ಲಿಯೂ, ಅವರ ಎಲ್ಲಾ ಭೂಮಿಗಳಲ್ಲಿಯೂ ಆ ನೊಣಗಳು ತುಂಬಿಕೊಳ್ಳುವವು.22ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೊಣಗಳ ಕಾಟವು ಇರುವುದಿಲ್ಲ.23ಹೀಗೆ ನನ್ನ ಜನಕ್ಕೂ, ನಿನ್ನ ಜನಕ್ಕೂ ನಡುವೆ ವ್ಯತ್ಯಾಸವನ್ನುಂಟು ಮಾಡುವೆನು. ನಾಳೆಯೇ ಈ ಮಹತ್ಕಾರ್ಯ ಉಂಟಾಗುವುದು> ಎಂದು ಹೇಳಬೇಕು>> ಎಂದನು.24ಯೆಹೋವನು ಹಾಗೆಯೇ ಮಾಡಿದನು. ಬಾಧಿಸುವ ನೊಣಗಳು ಫರೋಹನ ಅರಮನೆಯಲ್ಲಿಯೂ, ಅವನ ಪರಿವಾರದವರ ಮನೆಗಳಲ್ಲಿಯೂ, ಸಮಸ್ತ ಐಗುಪ್ತ ದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು. ಅವುಗಳಿಂದ ದೇಶವು ಹಾಳಾಗಿಹೋಯಿತು.25ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, <<ನೀವು ಹೋಗಿ ಈ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ>> ಎಂದನು.26ಆದರೆ ಮೋಶೆ, <<ಹಾಗೆ ಮಾಡುವುದು ಸರಿಯಲ್ಲ, ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞವನ್ನರ್ಪಿಸುವುದು ಐಗುಪ್ತ್ಯರಿಗೆ ಅಸಹ್ಯವಾಗಿದೆ. ಐಗುಪ್ತ್ಯರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಯಜ್ಞ ಅರ್ಪಿಸಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೇ?27ನಾವು ಅರಣ್ಯದಲ್ಲಿ ಮೂರು ದಿನಗಳ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು>> ಎಂದನು.28ಅದಕ್ಕೆ ಫರೋಹನು ಅವರಿಗೆ, <<ನಿಮ್ಮ ದೇವರಾದ ಯೆಹೋವನಿಗೆ ಅರಣ್ಯದಲ್ಲಿ ಯಜ್ಞಮಾಡುವಂತೆ ನಾನು ನಿಮಗೆ ಅಪ್ಪಣೆ ಕೊಡುತ್ತೇನೆ. ಆದರೆ ಬಹಳ ದೂರ ಹೋಗಬಾರದು. ನನಗೋಸ್ಕರ ಪ್ರಾರ್ಥನೆ ಮಾಡಿರಿ>> ಎಂದನು.29ಅದಕ್ಕೆ ಮೋಶೆಯು, <<ನಾನು ನಿನ್ನ ಬಳಿಯಿಂದ ಹೊರಟು ಹೋದ ಕೂಡಲೇ, ಫರೋಹನಾದ ನಿನಗೂ, ನಿನ್ನ ಪರಿವಾರದವರಿಗೂ ನೊಣಗಳ ಬಾಧೆಯು ನಾಳೆಯಿಂದ ಇರಬಾರದೆಂಬುದಾಗಿ ನಾನು ಯೆಹೋವನನ್ನು ಬೇಡಿಕೊಳ್ಳುವೆನು. ಆದರೆ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ನೀನು ನನ್ನ ಜನರಿಗೆ ಅಪ್ಪಣೆಕೊಡದೆ ಇನ್ನು ಮುಂದೆ ವಂಚನೆಮಾಡಬಾರದು>> ಎಂದನು.30ಮೋಶೆ ಫರೋಹನ ಬಳಿಯಿಂದ ಹೊರಟು ಹೋಗಿ ಯೆಹೋವನಿಗೆ ಪ್ರಾರ್ಥನೆಮಾಡಿದನು.31ಮೋಶೆಯು ಪ್ರಾರ್ಥಿಸಿದಂತೆಯೇ ಯೆಹೋವನು ಮಾಡಿದನು. ಆ ನೊಣಗಳೆಲ್ಲಾ ಫರೋಹನ ಬಳಿಯಿಂದಲೂ, ಅವನ ಪ್ರಜಾಪರಿವಾರದವರ ಬಳಿಯಿಂದಲೂ ತೊಲಗಿಹೋದವು. ಒಂದೂ ಉಳಿಯಲಿಲ್ಲ.32ಆದರೂ ಫರೋಹನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಜನರಿಗೆ ಹೋಗುವುದಕ್ಕೆ ಅಪ್ಪಣೆ ಕೊಡಲಿಲ್ಲ.
9ದನಕರುಗಳಿಗೆ ಉಂಟಾದ ವ್ಯಾಧಿ
1ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, <<ನೀನು, ಫರೋಹನ ಬಳಿಗೆ ಹೋಗಿ ಅವನಿಗೆ, <ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬುದಾಗಿ ಹೇಳಿದ್ದಾನೆ.2ನೀನು ಅವರಿಗೆ ಅಪ್ಪಣೆ ಕೊಡದೆ ಇನ್ನೂ ಅವರನ್ನು ತಡೆದರೆ,3ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ, ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯನ್ನು ಎತ್ತಿ ಘೋರವ್ಯಾಧಿಯನ್ನು ಉಂಟುಮಾಡುವನೆಂದು ತಿಳಿದುಕೋ.4ಯೆಹೋವನು ಇಸ್ರಾಯೇಲರ ಪಶುಗಳಿಗೂ, ಐಗುಪ್ತರ ಪಶುಗಳಿಗೂ ವ್ಯತ್ಯಾಸವನ್ನುಂಟು ಮಾಡುವನು. ಇಸ್ರಾಯೇಲರಿಗಿರುವ ಪಶುಗಳಲ್ಲಿ ಒಂದೂ ಸಾಯುವುದಿಲ್ಲ> ಎಂದು ಹೇಳಬೇಕು>> ಎಂದನು.5ಇದಲ್ಲದೆ ಯೆಹೋವನು, <<ನಿರ್ದಿಷ್ಟವಾದ ಸಮಯವನ್ನು ನೇಮಿಸಿ, ನಾಳೆಯೇ ಈ ಕಾರ್ಯವನ್ನು ಈ ದೇಶದಲ್ಲಿ ಮಾಡುವನು ಎಂದು ಹೇಳು>> ಎಂದನು.6ಮರುದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.7ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ.ಹುಣ್ಣುಬೊಕ್ಕೆಗಳ ಬಾಧೆ
8ಯೆಹೋವನು ಮೋಶೆ ಮತ್ತು ಆರೋನರಿಗೆ, <<ನೀವು ಒಲೆಯ ಬೂದಿಯನ್ನು ಕೈತುಂಬಾ ತೆಗೆದುಕೊಳ್ಳಿರಿ. ಮೋಶೆ ಅದನ್ನು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ.9ಆಗ ಅದು ಐಗುಪ್ತ ದೇಶದಲ್ಲೆಲ್ಲಾ ಧೂಳಿನ ಕಣಗಳಾಗಿ ಮಾರ್ಪಟ್ಟು ಅದು ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವವು>> ಎಂದು ಹೇಳಿದನು.10ಅದರಂತೆ ಮೋಶೆ ಮತ್ತು ಆರೋನರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಆ ಬೂದಿಯನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹರಡಿ ಹುಣ್ಣುಗಳಾಗುವಂತೆ ಬೊಕ್ಕೆಗಳನ್ನೆಬ್ಬಿಸಿತು.11ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.12ಆದರೂ ಯೆಹೋವನು ಮೋಶೆಗೆ ಹೇಳಿದಂತೆಯೇ ಆಯಿತು. ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.ಆನೆಕಲ್ಲಿನ ಮಳೆಯಿಂದ ಉಂಟಾದ ಬಾಧೆ
13ತರುವಾಯ ಯೆಹೋವನು ಮೋಶೆಗೆ, <<ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, <ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.14ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.15ನಾನು ಕೈಯನ್ನೆತ್ತಿ ನಿನ್ನನ್ನೂ, ನಿನ್ನ ಪ್ರಜೆಗಳನ್ನೂ, ವ್ಯಾಧಿಯಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.16ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.17ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?18ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ.19ಆದಕಾರಣ ನೀನು ಆಳುಗಳನ್ನು ಕಳುಹಿಸಿ ನಿನ್ನ ಪಶುಗಳನ್ನೂ, ನಿನಗೆ ಹೊಲದಲ್ಲಿರುವುದೆಲ್ಲವನ್ನೂ ಬೇಗ ಭದ್ರಪಡಿಸು. ಮನೆಯೊಳಗೆ ಬಾರದೆ ಬಯಲಿನಲ್ಲೇ ಇರುವ ಎಲ್ಲಾ ಮನುಷ್ಯರೂ, ಪಶುಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು> >> ಎಂದು ಹೇಳಿದನು.20ಆಗ ಫರೋಹನ ಸೇವಕರಲ್ಲಿ ಯಾರಾರು ಯೆಹೋವನ ಮಾತಿಗೆ ಹೆದರಿದರೋ ಅವರು ತಮ್ಮ ಆಳುಗಳನ್ನೂ ಪಶುಗಳನ್ನೂ ಬೇಗ ಮನೆಗೆ ಬರಮಾಡಿಕೊಂಡರು.21ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ, ಅವರು ತಮ್ಮ ಆಳುಗಳನ್ನೂ, ಪಶುಗಳನ್ನೂ ಹೊಲದಲ್ಲಿಯೇ ಬಿಟ್ಟರು.22ಯೆಹೋವನು ಮೋಶೆಗೆ, <<ಆಕಾಶಕ್ಕೆ ನಿನ್ನ ಕೈಚಾಚು, ಆಗ ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಹೊಲದಲ್ಲಿರುವ ಎಲ್ಲಾ ಪೈರುಗಳ ಮೇಲೆಯೂ ಆನೆಕಲ್ಲಿನ ಮಳೆ ಬೀಳುವುದು>> ಎಂದು ಹೇಳಿದನು.23ಮೋಶೆಯು ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಯೆಹೋವನು ಗುಡುಗನ್ನು, ಆನೆಕಲ್ಲಿನ ಮಳೆಯನ್ನು ಕಳುಹಿಸಿದನು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಯೆಹೋವನು ಐಗುಪ್ತ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.24ಆನೆಕಲ್ಲಿನ ಮಳೆಯು ಬಹು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತಿತ್ತು. ಐಗುಪ್ತ್ಯದವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ.25ಆ ಮಳೆಯಿಂದ ಐಗುಪ್ತ ದೇಶದ ಎಲ್ಲಾ ಕಡೆಗಳಲ್ಲಿದ್ದ ಮನುಷ್ಯರು, ಪಶುಗಳು, ಬಯಲಿನಲ್ಲಿದ್ದ ಎಲ್ಲವೂ ನಾಶವಾದವು. ಆನೆಕಲ್ಲಿನ ಮಳೆಯಿಂದ ಹೊಲಗಳಲ್ಲಿದ್ದ ಪೈರುಗಳು ಹಾಳಾದವು. ಹೊಲಗಳಲ್ಲಿದ್ದ ಮರಗಳು ಮುರಿದುಹೋದವು.26ಇಸ್ರಾಯೇಲರು ವಾಸವಾಗಿದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಆನೆಕಲ್ಲಿನ ಮಳೆ ಬೀಳಲಿಲ್ಲ.27ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, <<ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಯೆಹೋವನು ನ್ಯಾಯವಂತನು. ನಾನೂ ನನ್ನ ಜನರೂ ದೋಷಿಗಳು.28ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ>> ಎಂದನು.29ಅದಕ್ಕೆ ಮೋಶೆ, <<ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಆನೆಕಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳುವಿ.30ಆದರೂ ನೀನಾಗಲಿ, ನಿನ್ನ ಪರಿವಾರದವರಾಗಲಿ, ದೇವರಾಗಿರುವ ಯೆಹೋವನಿಗೆ ಆಗಲೂ ಭಯಪಡುವುದಿಲ್ಲವೆಂದು ಬಲ್ಲೆನು>> ಎಂದನು.31ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವಾದವು. ಏಕೆಂದರೆ ಜವೆಗೋದಿ ತೆನೆ ಬಿಟ್ಟಿತ್ತು, ಅಗಸೆ ಮೊಗ್ಗು ಬಿಟ್ಟಿತ್ತು.32ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ಹಾನಿಯಾಗಲಿಲ್ಲ.33ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಕ್ಕೆ ಬಂದು ಕೈಯನ್ನೆತ್ತಿ ಯೆಹೋವನನ್ನು ಪ್ರಾರ್ಥಿಸಿದನು. ಗುಡುಗೂ, ಆನೆಕಲ್ಲಿನ ಮಳೆಯೂ ನಿಂತುಹೋದವು.34ಆದರೆ ಆನೆಕಲ್ಲು ಮಳೆ, ಗುಡುಗು ನಿಂತುಹೋದದ್ದನ್ನು ಫರೋಹನು ಕಂಡಾಗ ಅವನೂ, ಅವನ ಪರಿವಾರದವರೂ ತಮ್ಮ ಹೃದಯಗಳನ್ನು ಕಠಿಣಮಾಡಿಕೊಂಡು ಇನ್ನೂ ಪಾಪ ಮಾಡಿದರು.35ಯೆಹೋವನು ಮೋಶೆಯಿಂದ ಹೇಳಿಸಿದಂತೆಯೇ ಆಯಿತು. ಫರೋಹನ ಹೃದಯವು ಕಠಿಣವಾಗಿತ್ತು. ಅವನು ಇಸ್ರಾಯೇಲರನ್ನು ಹೋಗಲು ಬಿಡಲಿಲ್ಲ.
10ಮಿಡತೆಗಳಿಂದ ಉಂಟಾದ ಬಾಧೆ
1ತರುವಾಯ ಯೆಹೋವನು ಮೋಶೆಗೆ, <<ಫರೋಹನ ಬಳಿಗೆ ಹಿಂತಿರುಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಹೃದಯಗಳನ್ನು ಕಠಿಣಗೊಳಿಸಿದ್ದೇನೆ. ಏಕೆಂದರೆ ನಾನು ಈ ಮಹತ್ಕಾರ್ಯಗಳನ್ನು ಅವರ ಮುಂದೆ ನಡೆಸುವುದಕ್ಕೆ ಇದು ಕಾರಣವಾಯಿತು.2ಇಸ್ರಾಯೇಲರು ತಮ್ಮ ಮಕ್ಕಳಿಗೂ, ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡೆಸಿರುವ ಈ ಮಹತ್ಕಾರ್ಯಗಳನ್ನು ವಿವರಿಸಿ ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದ ಹಾಗೆ ಶಿಕ್ಷಿಸಿದನು ಎಂಬುದಾಗಿ ತಿಳಿಸಬೇಕು. ಹೀಗೆ ನಾನು ಫರೋಹನ ಹೃದಯವನ್ನು, ಅವನ ಪರಿವಾರದವರ ಹೃದಯಗಳನ್ನೂ ಕಠಿಣಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳಿದುಕೊಳ್ಳುವಿರಿ>> ಎಂದನು.3ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, <<ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, <ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.4ಅಪ್ಪಣೆಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರುವಂತೆ ಮಾಡುವೆನು.5ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವವು. ನೆಲವೇ ಕಾಣಿಸದೆ ಹೋಗುವುದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆ ಚಿಗುರುಗಳನ್ನೂ ತಿಂದುಬಿಡುವವು.6ಅವು ನಿನ್ನ ಮನೆಗಳಲ್ಲಿಯೂ, ನಿನ್ನ ಪರಿವಾರದವರ ಮನೆಗಳಲ್ಲಿಯೂ, ಐಗುಪ್ತ್ಯರೆಲ್ಲರ ಮನೆಗಳಲ್ಲಿಯೂ ತುಂಬಿಕೊಂಡಿರುವವು. ನಿಮ್ಮ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಎಂದೂ ಅವರು ನೋಡಿರುವುದಿಲ್ಲ> >> ಎಂದು ಹೇಳಿದರು. ಇದನ್ನು ಹೇಳಿ ಮೋಶೆ ತಿರುಗಿಕೊಂಡು ಫರೋಹನ ಬಳಿಯಿಂದ ಹೊರಟುಹೋದನು.7ಆಗ ಫರೋಹನ ಪರಿವಾರದವರು ಅವನಿಗೆ, <<ಈ ಮನುಷ್ಯನು ಇನ್ನು ಎಷ್ಟು ದಿನ ನಮಗೆ ಉರುಲಾಗಿರಬೇಕು. ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವುದಕ್ಕೆ ಅಪ್ಪಣೆಕೊಡು. ಐಗುಪ್ತ ದೇಶವು ಹಾಳಾಯಿತೆಂದು ಇನ್ನು ನಿನ್ನ ಮನಸ್ಸಿಗೆ ಬರಲಿಲ್ಲವೋ?>> ಎಂದು ಹೇಳಿದರು.8ಅದನ್ನು ಕೇಳಿ ಫರೋಹನು, ಮೋಶೆ ಮತ್ತು ಆರೋನರನ್ನು ತಿರುಗಿ ಕರೆಯಿಸಿ ಅವರಿಗೆ, <<ನೀವು ಹೋಗಿ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಹುದು. ಆದರೆ ಯಾರಾರು ಹೋಗಬೇಕನ್ನುತ್ತೀರಿ?>> ಎಂದು ಕೇಳಿದನು.9ಮೋಶೆ ಅವನಿಗೆ, <<ನಾವು ಯೆಹೋವನಿಗೆ ಜಾತ್ರೆಯನ್ನು ಆಚರಿಸಬೇಕಾಗಿದೆ. ಆದಕಾರಣ ಚಿಕ್ಕವರು ಮೊದಲುಗೊಂಡು, ಮುದುಕರವರೆಗೂ ಎಲ್ಲರೂ ಹೋಗುತ್ತೇವೆ; ಗಂಡು ಹೆಣ್ಣುಮಕ್ಕಳನ್ನೂ, ದನಕುರಿಗಳ ಮಂದೆಯನ್ನು ತೆಗೆದುಕೊಂಡು ಹೋಗುತ್ತೇವೆ>> ಎಂದು ಉತ್ತರಕೊಟ್ಟನು.10ಅದಕ್ಕೆ ಫರೋಹನು, <<ನಾನು ನಿಮ್ಮನ್ನು ಮತ್ತು ನಿಮ್ಮ ಮಕ್ಕಳನ್ನು ಹೋಗುವುದಕ್ಕೆ ಅಪ್ಪಣೆ ಕೊಡುವುದಿಲ್ಲ; ಕಳುಹಿಸಿಕೊಟ್ಟರೆ, ಯೆಹೋವನು ನಿಮ್ಮ ಸಂಗಡವಿರುವನು. ನೋಡಿ, ನೀವು ದುರಾಲೋಚನೆಯಿಂದ ಕೂಡಿದವರು.11ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಯೆಹೋವನನ್ನು ಆರಾಧಿಸಿ ಬರಬಹುದು. ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೇ>> ಎಂದು ಹೇಳಿ ಅವರನ್ನು ಫರೋಹನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು.12ಆಗ ಯೆಹೋವನು ಮೋಶೆಗೆ, <<ಐಗುಪ್ತ ದೇಶದ ಮೇಲೆ ನಿನ್ನ ಕೈಯನ್ನು ಚಾಚಿ, ಮಿಡತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ>> ಎಂದು ಹೇಳಿದನು.13ಮೋಶೆ ತನ್ನ ಕೋಲನ್ನು ಐಗುಪ್ತ ದೇಶದ ಮೇಲೆ ಚಾಚಿದಾಗ, ಯೆಹೋವನು ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸುವಂತೆ ಮಾಡಿದನು. ಹೊತ್ತಾರೆ ಗಾಳಿಯ ದೆಸೆಯಿಂದ ಮಿಡತೆಗಳು ಬಂದಿದ್ದವು.14ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದಿಳಿದು ಐಗುಪ್ತ ದೇಶದ ಎಲ್ಲಾ ಕಡೆಯಲ್ಲಿಯೂ ಅಪರಿಮಿತವಾಗಿ ಮುತ್ತಿಕೊಂಡವು. ಅಂಥ ಮಿಡತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರಲು ಸಾಧ್ಯವಿಲ್ಲ.15ಅವು ಭೂಮಿಯನ್ನೆಲ್ಲಾ ಮುಚ್ಚಿಕೊಂಡಿದ್ದರಿಂದ ನೆಲವು ಕಾಣದೇ ಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ, ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ಅವು ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.16ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ, <<ನಾನು ನಿಮ್ಮ ದೇವರಾದ ಯೆಹೋವನಿಗೂ, ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ.17ಆದರೂ ಈ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು>> ಎಂದನು.18ಮೋಶೆ ಫರೋಹನ ಬಳಿಯಿಂದ ಹೊರಟು ಯೆಹೋವನನ್ನು ಬೇಡಿಕೊಂಡನು.19ಯೆಹೋವನು ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದನು. ಅದು ಆ ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದೊಳಗೆ ಹಾಕಿಬಿಟ್ಟಿತು. ಐಗುಪ್ತ ದೇಶದ ಮೇರೆಗಳೊಳಗೆ ಒಂದು ಮಿಡತೆಯೂ ನಿಲ್ಲಲಿಲ್ಲ.20ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಕಳುಹಿಸಿಕೊಡಲು ಒಪ್ಪಲಿಲ್ಲ.ಮೂರು ದಿನ ಕಾರ್ಗತ್ತಲೆಯುಂಟಾದದ್ದು
21ತರುವಾಯ ಯೆಹೋವನು ಮೋಶೆಗೆ, <<ಆಕಾಶಕ್ಕೆ ನಿನ್ನ ಕೈಯನ್ನು ಚಾಚು. ಆಗ ಐಗುಪ್ತ ದೇಶದಲ್ಲೆಲ್ಲಾ ಕತ್ತಲು ಉಂಟಾಗುವುದು. ಆ ಕತ್ತಲೆಯಿಂದಾಗಿ ಜನರು ತಡವರಿಸುತ್ತಾ ನಡೆಯುವರು>> ಎಂದು ಹೇಳಿದನು.22ಮೋಶೆ ಆಕಾಶಕ್ಕೆ ಕೈಯನ್ನು ಚಾಚಿದಾಗ ಐಗುಪ್ತ ದೇಶದಲ್ಲೆಲ್ಲಾ ಮೂರು ದಿನ ಕಾರ್ಗತ್ತಲೆ ಮುಚ್ಚಿಕೊಂಡಿತು.23ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ. ಯಾರೂ ತಮ್ಮ ಸ್ಥಳದಿಂದ ಏಳಲೂ ಇಲ್ಲ. ಆದರೆ ಇಸ್ರಾಯೇಲರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕು ಇತ್ತು.24ಆಗ ಫರೋಹನು ಮೋಶೆಯನ್ನು ಕರೆಯಿಸಿ ಅವನಿಗೆ, <<ನೀವು ಹೋಗಿ ಯೆಹೋವನಿಗೆ ಆರಾಧನೆ ಮಾಡಿ ಬರಬಹುದು. ನಿಮ್ಮ ಮನೆಗಳಿಗೆ ಸೇರಿದವರೂ ಹೋಗಬಹುದು. ನಿಮ್ಮ ಕುರಿದನಗಳನ್ನು ಮಾತ್ರ ಇಲ್ಲೇ ಬಿಟ್ಟುಹೋಗಬೇಕು>> ಎಂದನು.25ಅದಕ್ಕೆ ಮೋಶೆಯು, <<ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞಹೋಮಗಳನ್ನು ಮಾಡುವಂತೆ ಬೇಕಾದ ಪಶುಗಳನ್ನು ತೆಗೆದುಕೊಂಡು ಹೋಗಲು ಅಪ್ಪಣೆಯಾಗಬೇಕು.26ನಮ್ಮ ಎಲ್ಲಾ ಪಶುಗಳನ್ನೂ ಸಹ ನಮ್ಮ ಸಂಗಡ ತೆಗೆದುಕೊಂಡು ಹೋಗುವೆವು. ಒಂದು ಗೊರಸನ್ನಾದರೂ ನಾವು ಬಿಟ್ಟು ಹೋಗುವುದಿಲ್ಲ. ಆ ಪಶುಗಳಿಂದಲೇ ನಮ್ಮ ದೇವರಾದ ಯೆಹೋವನಿಗೆ ಆರಾಧನೆಯನ್ನು ಸಲ್ಲಿಸಬೇಕು. ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ನಾವು ಅಲ್ಲಿಗೆ ಸೇರುವುದಕ್ಕೆ ಮೊದಲು ನಮಗೆ ತಿಳಿಯದು>> ಎಂದನು.27ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.28ಆಗ ಫರೋಹನು ಮೋಶೆಗೆ, <<ನನ್ನನ್ನು ಬಿಟ್ಟುಹೋಗು. ಇನ್ನು ಮುಂದೆ ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವೆ>> ಎಂದು ಹೇಳಿದನು.29ಅದಕ್ಕೆ ಮೋಶೆಯು, <<ನೀನು ಸರಿಯಾಗಿ ಹೇಳಿದೆ. ಇನ್ನು ಮೇಲೆ ನಾನು ನಿನ್ನ ಮುಖವನ್ನು ಪುನಃ ನೋಡುವುದಿಲ್ಲ>> ಎಂದನು.
11ಚೊಚ್ಚಲುಗಳ ಸಂಹಾರ
1ಯೆಹೋವನು ಮೋಶೆಗೆ, <<ಫರೋಹನಿಗೂ ಮತ್ತು ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆ ಕೊಡುವನು. ಮಾತ್ರವಲ್ಲದೆ ನಿಮ್ಮೆಲ್ಲರನ್ನು ಬಲವಂತದಿಂದ ಕಳುಹಿಸಿ ಬಿಡುವನು.2ಆದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು>> ಎಂದನು.3ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು.4ಆಗ ಮೋಶೆ ಫರೋಹನಿಗೆ, <<ಯೆಹೋವನು ಅಪ್ಪಣೆಮಾಡುವುದೇನೆಂದರೆ, <ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು.5ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು.6ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವುದು, ಅಂಥ ಗೋಳಾಟವು ಈವರೆಗೆ ದೇಶದಲ್ಲಿ ಎಂದೂ ಉಂಟಾಗಿರಲಿಲ್ಲ, ಮುಂದೆಯೂ ಉಂಟಾಗುವುದಿಲ್ಲ.7ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ>8ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, <ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು> ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು>> ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.9ಯೆಹೋವನು ಮೋಶೆಗೆ, <<ಐಗುಪ್ತ ದೇಶದಲ್ಲಿ ನನ್ನ ಮಹತ್ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ನಡೆಯಬೇಕಾಗಿರುವುದರಿಂದ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ>> ಎಂದು ಹೇಳಿದನು.10ಮೋಶೆ ಮತ್ತು ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು.
12ಮೊದಲ ಪಸ್ಕಹಬ್ಬ
1ಐಗುಪ್ತ ದೇಶದಲ್ಲಿ ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,2<<ಎಲ್ಲಾ ತಿಂಗಳುಗಳಲ್ಲಿ ಇದೇ ನಿಮಗೆ ಮೊದಲ ತಿಂಗಳಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರುವುದು.3ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, <ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.4ಕುಟುಂಬವು ಚಿಕ್ಕದಾಗಿದ್ದರೆ, ಒಂದು ಕುರಿಮರಿಯನ್ನು ಪೂರ್ಣವಾಗಿ ತಿನ್ನುವುದಕ್ಕೆ ಆಗದೆ ಹೋದ ಪಕ್ಷಕ್ಕೆ ನೆರೆಮನೆಯ ಕುಟುಂಬದವರೊಂದಿಗೆ ಸೇರಿ, ಒಬ್ಬೊಬ್ಬನು ಎಷ್ಟೆಷ್ಟು ತಿನ್ನುವನೆಂದು ಗೊತ್ತುಮಾಡಿಕೊಂಡು ಜನಗಳ ಸಂಖ್ಯಾನುಸಾರ ಮರಿಗಳನ್ನು ತೆಗೆದುಕೊಳ್ಳಲಿ.5ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.6ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.7ಅವರು ಅವುಗಳ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ತಾವು ಆ ಭೋಜನವನ್ನು ಮಾಡುವ ಮನೆಬಾಗಿಲಿನ ಎರಡು ನಿಲುವುಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.8ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.9ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು. ಅದರ ತಲೆ, ತೊಡೆ, ಹೊಟ್ಟೆ, ಇವುಗಳ ಸಹಿತವಾಗಿ ಬೆಂಕಿಯಲ್ಲೇ ಸುಟ್ಟು ತಿನ್ನಬೇಕು.10ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ಉಳಿಸಕೂಡದು, ಬೆಳಗಿನವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.11ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗೆಂದರೆ: ನೀವು ನಡುವನ್ನು ಕಟ್ಟಿಕೊಂಡು, ಕೆರವನ್ನು ಮೆಟ್ಟಿಕೊಂಡು, ಕೋಲುಹಿಡಿದು, ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು.12ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.13ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ.14ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.ಹುಳಿಯಿಲ್ಲದ ರೊಟ್ಟಿಯ ಹಬ್ಬ
15<< <ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.16ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆ ಸೇರಬೇಕು. ಈ ಎರಡು ದಿನಗಳಲ್ಲಿ ಯಾವ ಕೆಲಸವನ್ನು ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾತ್ರ ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನು ಮಾಡಬಾರದು.17ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿದೆ.18ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.19ಆ ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟು ಇರಬಾರದು. ಹುಳಿ ಬೆರಸಿದ್ದನ್ನು ಯಾರು ತಿನ್ನುವರೋ ಅವನು ಪರದೇಶದವನಾಗಲಿ, ಸ್ವದೇಶದವನಾಗಲಿ ಇಸ್ರಾಯೇಲ ಸಮೂಹದೊಳಗಿಂದ ತೆಗೆದುಹಾಕಲ್ಪಡಬೇಕು.20ನೀವು ನಿಮ್ಮ ಮನೆಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು, ಹುಳಿಕಲಸಿದ ಯಾವುದನ್ನೂ ತಿನ್ನಕೂಡದು> >> ಎಂದು ಆಜ್ಞಾಪಿಸಿದನು.ಮೊದಲನೆಯ ಪಸ್ಕ ಹಬ್ಬದ ಆಚರಣೆ
21ಆಗ ಮೋಶೆಯು ಇಸ್ರಾಯೇಲರ ಹಿರಿಯರೆಲ್ಲರನ್ನೂ ಕರೆಯಿಸಿ ಅವರಿಗೆ, <<ನೀವು, ನಿಮ್ಮ ನಿಮ್ಮ ಕುಟುಂಬಗಳಿಗೋಸ್ಕರ ಮಂದೆಯಿಂದ ಮರಿಗಳನ್ನು ಆರಿಸಿಕೊಂಡು ಪಸ್ಕಹಬ್ಬಕ್ಕೆ ಕೊಯ್ಯಿರಿ.22ಹಿಸ್ಸೋಪ್ ಗಿಡದ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿಲಿನ ಮೇಲಿನ ಅಡ್ಡಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವುಪಟ್ಟಿಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೊರಗೆ ಹೋಗಬಾರದು.23ಯೆಹೋವನು ಐಗುಪ್ತ್ಯರನ್ನು ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ.24ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವೆಂದು ಆಚರಿಸಬೇಕು.25ಯೆಹೋವನು ತನ್ನ ಮಾತಿನ ಮೇರೆಗೆ ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಈ ಆಚರಣೆಯನ್ನು ಕೈಕೊಳ್ಳಬೇಕು.26ಮುಂದೆ ನಿಮ್ಮ ಮಕ್ಕಳು, <ನೀವು ನಡೆಸುವ ಈ ಆಚರಣೆ ಏನು?> ಎಂದು ನಿಮ್ಮನ್ನು ಕೇಳುವಾಗ,27ನೀವು ಅವರಿಗೆ, <ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಸ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು> >> ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು.28ಇಸ್ರಾಯೇಲರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು.ಐಗುಪ್ತ್ಯರ ಚೊಚ್ಚಲುಗಳು ಸತ್ತುಹೋದದ್ದು
29ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.30ಆ ರಾತ್ರಿಯಲ್ಲಿ ಫರೋಹನೂ, ಅವನ ಪರಿವಾರದವರೂ, ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಸಾವಿಲ್ಲದ ಮನೆ ಒಂದೂ ಇರಲಿಲ್ಲ. ಐಗುಪ್ತ ದೇಶದಲ್ಲಿ ದೊಡ್ಡ ಗೋಳಾಟವಾಯಿತು.31ಫರೋಹನು ಆ ರಾತ್ರಿಯಲ್ಲೇ ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, <<ನೀವು ಎದ್ದು ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ. ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸುವುದಕ್ಕೆ ನೀವು ಮತ್ತು ಇಸ್ರಾಯೇಲರು ಹೊರಟುಹೋಗಿರಿ.32ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳ ಹಿಂಡುಗಳನ್ನು ತೆಗೆದುಕೊಂಡು ಹೋಗಿರಿ. ಅದಲ್ಲದೆ ನನ್ನನ್ನೂ ಸಹ ಆಶೀರ್ವದಿಸಿರಿ>> ಎಂದನು.ವಿಮೋಚನೆ - ರಾಮ್ಸೇಸ್ ಪಟ್ಟಣದಿಂದ ಸುಕ್ಕೋತಿಗೆ ಪಯಣ
33ಐಗುಪ್ತರು, <<ನಾವೆಲ್ಲರು ಸಾಯುತ್ತೇವೆ>> ಎಂದುಕೊಂಡು ಇಸ್ರಾಯೇಲರನ್ನು ತಮ್ಮ ದೇಶದಿಂದ ಬೇಗನೇ ಕಳುಹಿಸಿಬಿಡುವುದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲವಂತಮಾಡಿದರು.34ಆದುದರಿಂದ ಜನರು ಹಿಟ್ಟಿಗೆ ಹುಳಿಹಾಕುವುದಕ್ಕಿಂತ ಮೊದಲೇ ನಾದುವ ಪಾತ್ರೆಗಳ ಸಂಗಡ ಕಣಕದ ಮುದ್ದೆಯನ್ನು ಬಟ್ಟೆಯಲ್ಲಿ ಗಂಟುಕಟ್ಟಿ ಹೆಗಲಿನ ಮೇಲೆ ಹಾಕಿಕೊಂಡು ಹೊರಟುಹೋದರು.35ಇಸ್ರಾಯೇಲರು ಮೋಶೆಯ ಮಾತಿನ ಮೇರೆಗೆ ಐಗುಪ್ತ್ಯರಿಂದ ಬೆಳ್ಳಿ ಬಂಗಾರದ ಒಡವೆಗಳನ್ನು, ಬಟ್ಟೆಗಳನ್ನು ಕೇಳಿ ಪಡೆದುಕೊಂಡರು.36ಯೆಹೋವನು ಅವರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದೆಲ್ಲವನ್ನು ಐಗುಪ್ತರು ಕೊಟ್ಟರು. ಹೀಗೆ ಇಸ್ರಾಯೇಲರು ಐಗುಪ್ತ್ಯರ ಸೊತ್ತನ್ನು ಸುಲಿದುಕೊಂಡರು.37ಇಸ್ರಾಯೇಲರು ರಾಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಆರುಲಕ್ಷ ಮಂದಿ ಇದ್ದರು.38ಅವರೊಂದಿಗೆ ಬಹು ಮಂದಿ ಅನ್ಯರೂ ಹೊರಟುಬಂದಿದ್ದರು. ಕುರಿದನಗಳ ಹಿಂಡೂ ಪಶುಗಳೂ ಅವರ ಸಂಗಡ ಹೊರಟುಹೋದವು.39ಅವರು ಐಗುಪ್ತ ದೇಶದಿಂದ ತಂದ ನಾದಿದ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಕೊಂಡರು. ಅವರು ಐಗುಪ್ತ ದೇಶದಿಂದ ಹೊರಡಿಸಲ್ಪಟ್ಟು ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿರಲಿಲ್ಲ ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ.40ಇಸ್ರಾಯೇಲರು ಐಗುಪ್ತ ದೇಶದಲ್ಲಿ ಸುಮಾರು ನಾನೂರಮೂವತ್ತು ವರ್ಷ ವಾಸವಾಗಿದ್ದರು.41ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.42ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಿದರು. ಇಸ್ರಾಯೇಲರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಜಾಗರಣೆಯನ್ನು ಆಚರಿಸಬೇಕಾದ ರಾತ್ರಿಯು ಇದೇ ಆಗಿದೆ.ಪಸ್ಕಹಬ್ಬವನ್ನು ಆಚರಿಸಬೇಕಾದ ಕ್ರಮ
43ಯೆಹೋವನು ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ, <<ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗೆಂದರೆ, ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.44ಆದರೆ ನೀವು ಕ್ರಯಕ್ಕೆ ತೆಗೆದುಕೊಂಡ ಪ್ರತಿಯೊಬ್ಬ ಗುಲಾಮನು ಸುನ್ನತಿ ಮಾಡಿಸಿಕೊಂಡ ನಂತರ ಅದನ್ನು ತಿನ್ನಬಹುದು.45ಪರದೇಶದವರೂ, ಕೂಲಿಯವರೂ ಅದನ್ನು ತಿನ್ನಬಾರದು.46ಅವರವರ ಮನೆಯಲ್ಲಿಯೇ ಅದನ್ನು ಊಟಮಾಡಬೇಕು. ಅದರಲ್ಲಿ ಸ್ವಲ್ಪ ಮಾಂಸವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು.47ಇಸ್ರಾಯೇಲರ ಸಮೂಹದವರೆಲ್ಲರೂ ಈ ಹಬ್ಬವನ್ನು ಆಚರಿಸಬೇಕು.48ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು.49ಸ್ವದೇಶದವನಿಗೂ, ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು>> ಎಂದನು.50ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರೆಲ್ಲರೂ ಮಾಡಿದರು.51ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಐಗುಪ್ತ ದೇಶದಿಂದ ಹೊರಗೆ ತಂದನು.
13ಚೊಚ್ಚಲುಗಳ ಪ್ರತಿಷ್ಠೆ
1ಯೆಹೋವನು ಮೋಶೆಯ ಸಂಗಡ ಮಾತನಾಡಿ,2<<ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ>> ಎಂದು ಹೇಳಿದನು.ಹುಳಿಯಿಲ್ಲದ ರೊಟ್ಟಿಯ ಹಬ್ಬ
3ಮೋಶೆಯು ಇಸ್ರಾಯೇಲರಿಗೆ, <<ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.4ಚೈತ್ರ ಮಾಸದ ಈ ದಿನದಲ್ಲೇ ನೀವು ಹೊರಗೆ ಬಂದಿರುವಿರಿ.5ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.6ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.7ಆ ಏಳು ದಿನವೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮಾತ್ರವಲ್ಲದೆ, ನಿಮ್ಮಲ್ಲಿ ಹುಳಿಹಿಟ್ಟು ಕಾಣಿಸಬಾರದು. ಇಲ್ಲವೆ ಹುಳಿಹಿಟ್ಟು ನಿಮ್ಮ ಗಡಿಯಲ್ಲೇ ಕಾಣಬಾರದು.8ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ.9ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.10ಹೀಗಿರುವುದರಿಂದ ಪ್ರತಿವರ್ಷವು ನಿಯಮಿತವಾದ ಕಾಲದಲ್ಲಿ ನೀವು ಈ ಆಚರಣೆಯನ್ನು ಮಾಡಬೇಕು.ಚೊಚ್ಚಲುಗಳ ಸಮರ್ಪಣೆ
11<<ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಪ್ರಮಾಣಮಾಡಿದ ಪ್ರಕಾರ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ,12ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.13 ಮೊದಲು ಹುಟ್ಟಿದ ಕತ್ತೆಯ ಚೊಚ್ಚಲಮರಿಗೆ ಬದಲಾಗಿ ಕುರಿಮರಿಯನ್ನು ಬಿಡಿಸಿಕೊಳ್ಳಬಹುದು. ಹಾಗೆ ಬಿಡಿಸದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡು ಮಕ್ಕಳನ್ನು ಯೆಹೋವನಿಗಾಗಿ ಬಿಡಿಸಿಕೊಳ್ಳಲೇ ಬೇಕು.14ಮುಂದೆ ನಿಮ್ಮ ಮಕ್ಕಳು, <ಇದರ ಅರ್ಥ ಏನು?> ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, <ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.15ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ> >> ಎಂದು ಹೇಳಬೇಕು.16ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.ಮೇಘಸ್ತಂಭ ಮತ್ತು ಅಗ್ನಿಸ್ತಂಭ
17ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, <<ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ>> ಎಂದು ಹೇಳಿದನು.18ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.19ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, <<ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳೆಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು>> ಎಂದು ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.20ಅವರು ಸುಕ್ಕೋತಿನಿಂದ ಪ್ರಯಾಣ ಮಾಡಿ ಮರಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಪಾಳೆಯಮಾಡಿ ಇಳಿದುಕೊಂಡರು.21ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.22ಹಗಲಿನಲ್ಲಿ ಮೇಘಸ್ತಂಭವಾಗಿ, ರಾತ್ರಿಯಲ್ಲಿ ಅಗ್ನಿಸ್ತಂಭವಾಗಿ ಜನರನ್ನು ಬಿಟ್ಟು ಹೋಗದೆ ಅಲ್ಲಿಯೇ ಇರುತ್ತಿದ್ದನು.
14ಕೆಂಪು ಸಮುದ್ರವನ್ನು ದಾಟಿಹೋದದ್ದು
1ಯೆಹೋವನು ಮೋಶೆಯ ಸಂಗಡ ಮಾತನಾಡಿ2<<ಇಸ್ರಾಯೇಲರು ಹಿಂದಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪು ಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿಯೇ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು.3ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, <ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ> ಎಂದು ಅಂದುಕೊಳ್ಳುವನು.4ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. <ನಾನೇ ಯೆಹೋವನು> ಎಂದು ಐಗುಪ್ತ್ಯರಿಗೆ ತಿಳಿದು ಬರುವುದು>> ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.5ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, <<ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ>> ಎಂದುಕೊಂಡರು.6ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು.7ಶ್ರೇಷ್ಠವಾದ ಆರುನೂರು ರಥಗಳನ್ನೂ, ಐಗುಪ್ತ ದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಬೆನ್ನಟ್ಟಿ ಹೋದನು. ಆ ಎಲ್ಲಾ ರಥಗಳಲ್ಲಿ ಅಧಿಪತಿಗಳನ್ನೂ ಕರೆಸಿ ಕೊಂಡನು.8ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.9ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ, ರಥಗಳೂ, ಅವನ ರಾಹುತರೂ, ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುತ್ತಿರುವಾಗಲೇ ಅವರ ಸಮೀಪಕ್ಕೆ ಬಂದರು.10ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.11ಅವರು ಮೋಶೆಗೆ, <<ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?12ನಾವು ಐಗುಪ್ತ ದೇಶದಲ್ಲಿರುವಾಗಲೇ, <ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು> ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ>> ಎಂದು ಹೇಳಿದರು.13ಆದರೆ ಮೋಶೆ ಆ ಜನರಿಗೆ, <<ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.14ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ>> ಎಂದು ಹೇಳಿದನು.15ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, <<ನೀನು ನನಗೆ ಮೊರೆಯಿಡುವುದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲರಿಗೆ ಹೇಳು.16ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು, ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಕೊಂಡು ಹೋಗುವರು.17ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.18ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು>> ಎಂದನು.19ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.20ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ, ಇಸ್ರಾಯೇಲರ ಪಾಳೆಯಕ್ಕೂ ನಡುವೆ ಬಂದಿತು. ಅದು ಐಗುಪ್ತ್ಯರಿಗೆ ಕತ್ತಲನ್ನೂ, ಇಸ್ರಾಯೇಲರಿಗೆ ರಾತ್ರಿಯಲ್ಲಿ ಬೆಳಕನ್ನು ಕೊಟ್ಟಿದ್ದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಾಗಲಿಲ್ಲ.21ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.22ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.23ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.24ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು.25ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, <<ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ>> ಎಂದು ಹೇಳಿಕೊಂಡರು.ಹಿಂದಟ್ಟಿದ ಐಗುಪ್ತ್ಯರು ಮುಳುಗಿಹೋದದ್ದು
26ಅಷ್ಟರಲ್ಲಿ ಯೆಹೋವನು ಮೋಶೆಗೆ, <<ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು>> ಎಂದು ಹೇಳಿದನು.27ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ತಳ್ಳಿಬಿಟ್ಟನು.28ನೀರು ಮೊದಲಿನಂತೆ ಬಂದು ಆ ರಥಗಳನ್ನೂ, ರಾಹುತರನ್ನೂ, ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಳುಗಿಸಿಬಿಟ್ಟಿತ್ತು, ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.29ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.30ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಐಗುಪ್ತ್ಯರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು.31ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.
15ಜಯಗೀತೆ
1ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು:<<ಯೆಹೋವನಿಗೆ ಸ್ತೋತ್ರ ಗಾನಮಾಡೋಣ;
ಆತನು ಮಹಾಜಯಶಾಲಿಯಾದವನು.
ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.
2ನನ್ನ ಬಲವೂ, ಕೀರ್ತನೆಯೂ ಯಾಹುವೇ.ಆತನಿಂದ ನನಗೆ ರಕ್ಷಣೆ ಉಂಟಾಯಿತು.
ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ,
ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.
3ಯೆಹೋವನು ಯುದ್ಧವೀರನು;ಯೆಹೋವ ಎಂಬುದು ಆತನ ನಾಮವಾಗಿದೆ.
4ಆತನು ಫರೋಹನ ರಥಗಳನ್ನೂ, ಸ್ಯೆನಿಕರನ್ನೂ ಸಮುದ್ರದಲ್ಲಿ ಕೆಡವಿಹಾಕಿದನು.ಫರೋಹನ ಶ್ರೇಷ್ಠ ವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿ ಬಿಟ್ಟನು.
5ಆಳವಾದ ಸಾಗರವು ಅವರನ್ನು ಮುಚ್ಚಿಬಿಟ್ಟಿತು.ಅವರು ಕಲ್ಲಿನಂತೆ ಸಮುದ್ರದ ತಳವನ್ನು ಸೇರಿದರು.
6ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ.ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ.
7ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನ್ನೆದುರಿಗೆ ನಿಲ್ಲುವವರನ್ನು ಕೆಡವಿಬಿಟ್ಟಿರುವೆ.ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಸುಟ್ಟು ಭಸ್ಮಮಾಡಿ ಬಿಟ್ಟಿದೆ.
8ನಿನ್ನ ಮೂಗಿನ ಶ್ವಾಸದಿಂದ ಸಮುದ್ರದ ನೀರು ಒಟ್ಟುಗೂಡಿದವು;ಪ್ರವಾಹವು ಗೋಡೆಯೋಪಾದಿಯಲ್ಲಿ ನಿಂತುಕೊಂಡಿತು;
ಸಾಗರದಾಳದೊಳಗಿನ ನೀರು ಗಟ್ಟಿಯಾಯಿತು.
9ಶತ್ರುವು, <ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು;ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು.
ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು> ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.
10ಆದರೆ ನೀನು ಗಾಳಿಯನ್ನು ಊದಿದಾಗ, ಸಮುದ್ರವು ಅವರನ್ನು ಮುಚ್ಚಿಕೊಂಡಿತು;ಅವರು ಮಹಾಸಾಗರದೊಳಗೆ ಸೀಸದ ಗುಂಡಿನಂತೆ ಮುಳುಗಿಹೋದರು.
11ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು?ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು
ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?
12ನೀನು ನಿನ್ನ ಬಲಗೈಯನ್ನು ಚಾಚಿದಾಗ,ಭೂಮಿಯು ಬಾಯ್ದೆರೆದು ಶತ್ರುಗಳನ್ನು ನುಂಗಿಬಿಟ್ಟಿತಲ್ಲಾ.
13ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ.ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ.
14ಜನಾಂಗಗಳು ಇದನ್ನು ಕೇಳಿ ನಡುಗುವರು.ಫಿಲಿಷ್ಟಿಯದಲ್ಲಿ ವಾಸಿಸುವವರು ಭಯಭೀತರಾಗುವರು.
15ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು;ಮೋವಾಬ್ಯರ ಸೈನಿಕರು ನಡುಗುವರು;
ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.
16ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು.ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು
ದಾಟಿ ಹೋಗಿ ದೇಶವನ್ನು ಸೇರುವರು.
17ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಬಲಪಡಿಸುವಿ,ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಕಟ್ಟಿಕೊಂಡಿರುವ ಸ್ಥಳದವರೆಗೂ
ಕರ್ತನೇ, ನೀನು ನಿನಗಾಗಿ ಸಿದ್ಧಪಡಿಸಿಕೊಂಡಿರುವ ಪವಿತ್ರ ಪರ್ವತದವರೆಗೂ ಅವರನ್ನು ಬರಮಾಡುವಿ.
18ಯೆಹೋವನೇ ಯುಗಯುಗಾಂತರಗಳಲ್ಲಿಯೂ ಅರಸನಾಗಿ ಆಳುವವನು.>> 19ಫರೋಹನ ಕುದುರೆಗಳು, ರಥಗಳೂ, ರಾಹುತರೂ ಸಮುದ್ರದೊಳಗೆ ಬಂದಾಗ ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿ ಮುಳುಗಿಸಿಬಿಟ್ಟನು. ಆದರೆ ಇಸ್ರಾಯೇಲರಾದರೋ ಸಮುದ್ರದ ಮಧ್ಯದಲ್ಲಿನ ಒಣ ನೆಲದ ಮೇಲೆ ದಾಟಿ ಹೋದರು.20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.21ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು:<<ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ.
ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.>>
ಕಹಿನೀರು ಸಿಹಿಯಾದದ್ದು
22ಆನಂತರ ಮೋಶೆಯು ಇಸ್ರಾಯೇಲರನ್ನು ಕೆಂಪುಸಮುದ್ರದ ಮೂಲಕವಾಗಿ ನಡೆಸಿದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನಗಳು ನೀರಿಲ್ಲದೆ ಪ್ರಯಾಣ ಮಾಡಿದರು.23ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು.24ಜನರು ಮೋಶೆಗೆ, <<ನಾವೇನು ಕುಡಿಯಬೇಕು?>> ಎಂದು ಅವನಿಗೆ ವಿರುದ್ಧವಾಗಿ ಗುಣಗುಟ್ಟಿದರು.25ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲರಿಗಾಗಿ ಒಂದು ನಿಯಮವನ್ನು ಮಾಡಿ ಅವರನ್ನು ಪರೀಕ್ಷಿಸಿದನು.26ಯೆಹೋವನು ಅವರಿಗೆ, <<ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ>> ಎಂದನು.27ಆ ನಂತರ ಅವರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬುಗ್ಗೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆ ನೀರಿನ ಬಳಿಯಲ್ಲಿ ಅವರು ಇಳಿದು ಕೊಂಡರು.
16ದೇವರು ಲಾವಕ್ಕಿ ಮತ್ತು ಮನ್ನವನ್ನು ಕೊಟ್ಟದ್ದು
1ಇಸ್ರಾಯೇಲರ ಸಮೂಹವೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಎಲೀಮಿಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನ್ ಎಂಬ ಮರುಭೂಮಿಗೆ ಬಂದರು.2ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು.3ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, <<ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು>> ಎಂದರು.4ಆಗ ಯೆಹೋವನು ಮೋಶೆಗೆ, <<ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ.5 ಆರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಮಾಡುವಾಗ ಅದು ಪ್ರತಿದಿನದಲ್ಲಿ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವುದು>> ಎಂದು ಹೇಳಿದನು.6ಮೋಶೆ ಮತ್ತು ಆರೋನರು ಇಸ್ರಾಯೇಲರಿಗೆ, <<ನಿಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾತನು ಯೆಹೋವನೇ ಎಂಬುದು ಇಂದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವುದು.7ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?>> ಎಂದು ಹೇಳಿದರು.8ಆಗ ಮೋಶೆ, <<ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ>> ಎಂದನು.9ಮೋಶೆಯು ಆರೋನನಿಗೆ, <<ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, <ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು> >> ಎಂದು ಹೇಳಿದನು.10ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.11ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,12<<ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, <ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು> >> ಎಂಬುದೇ.13ಸಾಯಂಕಾಲವಾಗುತ್ತಲೇ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ತುಂಬಿಕೊಂಡವು. ಅದಲ್ಲದೆ ಹೊತ್ತಾರೆಯಲ್ಲಿ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.14ಆ ಮಂಜು ಕರಗಿ ಹೋದ ಮೇಲೆ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು.15ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, <<ಇದೇನಿರಬಹುದು?>> ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, <<ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.16 ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನೆಂದರೆ: ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಮೂರು ಸೇರಿನಂತೆ ತನ್ನ ಡೇರೆಯವರಿಗಾಗಿ ಕೂಡಿಸಿಕೊಳ್ಳಲಿ. ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಾಕಾರ ನೀವು ಕೂಡಿಸಿಕೊಳ್ಳಿರಿ>> ಎಂದು ಹೇಳಿದನು.17ಇಸ್ರಾಯೇಲರು ಹಾಗೆಯೇ ಮಾಡಿದರು. ಕೆಲವರು ಹೆಚ್ಚಾಗಿ, ಕೆಲವರು ಕಡಿಮೆಯಾಗಿ ಕೂಡಿಸಿಕೊಂಡರು.18ಅವರು ಅದನ್ನು ಸೇರಿನಿಂದ ಅಳತೆಮಾಡಿದರು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ. ಪ್ರತಿಯೊಬ್ಬನೂ ತನ್ನ ಭೋಜನಕ್ಕೆ ಸರಿಯಾಗುವಷ್ಟನ್ನು ಕೂಡಿಸಿಕೊಂಡಿದ್ದನು.19ಅದಲ್ಲದೆ ಮೋಶೆ ಅವರಿಗೆ, <<ಇದನ್ನು ಯಾರೂ ಮರು ದಿನದವರೆಗೆ ಇಟ್ಟುಕೊಳ್ಳಬಾರದು>> ಎಂದು ಹೇಳಿದನು.20ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳದೆ, ಅದರಲ್ಲಿ ಸ್ವಲ್ಪವನ್ನು ಮರು ದಿನದವರೆಗೆ ಇಟ್ಟುಕೊಂಡಾಗ ಅದು ಹುಳ ಬಿದ್ದು ಹೊಲಸುವಾಸನೆ ಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಕೋಪಗೊಂಡನು.21ಜನರು ಪ್ರತಿದಿನ ಮುಂಜಾನೆಯಲ್ಲಿ ತಮ್ಮ ಭೋಜನಕ್ಕೆ ತಕ್ಕಷ್ಟು ಕೂಡಿಸಿಕೊಂಡರು. ಬಿಸಿಲು ಹೆಚ್ಚಾದಾಗ ಅದು ಕರಗಿಹೋಗುತ್ತಿತ್ತು.22ಆರನೆಯ ದಿನ ಎರಡರಷ್ಟು ಆಹಾರವು, ಅಂದರೆ ಒಬ್ಬೊಬ್ಬನಿಗೆ ಎರಡೆರಡು ಸೇರಿನಂತೆ ಆರಿಸಿ ತುಂಬಿಟ್ಟುಕೊಂಡಿದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು.23ಅದಕ್ಕೆ ಅವನು, <<ಇದು ಯೆಹೋವನು ಹೇಳಿದ ಮಾತು, <ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ> >> ಎಂದನು.24ಮೋಶೆ ಆಜ್ಞಾಪಿಸಿದಂತೆ ಅವರು ಮರು ದಿನದವರೆಗೆ ಅದನ್ನು ಇಟ್ಟುಕೊಂಡರು. ಆದರೆ ಅದು ಕೆಟ್ಟು ಹೋಗಿರಲಿಲ್ಲ, ಹುಳ ಬೀಳಲ್ಲೂ ಇಲ್ಲ.25ಆಗ ಮೋಶೆ ಅವರಿಗೆ, <<ಈ ಹೊತ್ತು ಅದನ್ನು ಊಟ ಮಾಡಿರಿ. ಈ ದಿನವು ಯೆಹೋವನ ಸಬ್ಬತ್ ದಿನವಾಗಿರುವುದರಿಂದ ಈ ದಿನ ಅದು ಹೊಲದಲ್ಲಿ ಕಾಣಿಸಿಕೊಳ್ಳುವುದಿಲ್ಲ.26ಆರು ದಿನ ಅದನ್ನು ಕೂಡಿಸಿಡಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವುದರಿಂದ ಅದು ದೊರೆಯುವುದಿಲ್ಲ>> ಎಂದು ಹೇಳಿದನು.27ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ.28ಆಗ ಯೆಹೋವನು ಮೋಶೆಗೆ, <<ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?29ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು>> ಎಂದು ಹೇಳಿದನು.30ಆದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ವಿಶ್ರಮಿಸಿಕೊಂಡರು.31ಇಸ್ರಾಯೇಲರು ಆ ಆಹಾರಕ್ಕೆ <<ಮನ್ನ>> ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.32ಮೋಶೆಯು ಜನರಿಗೆ, <<ಯೆಹೋವನು ಆಜ್ಞಾಪಿಸಿದ್ದು ಇದೇ, <ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು> >> ಎಂದು ಹೇಳಿದನು.33ಆದಕಾರಣ ಮೋಶೆಯು ಆರೋನನಿಗೆ, <<ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು>> ಎಂದು ಹೇಳಿದನು.34ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ, ಆರೋನನು ಆಜ್ಞಾಶಾಸನ ಮಂಜೂಷದ ಪಕ್ಕದಲ್ಲಿ ಅದನ್ನು ಇರಿಸಿದನು.35ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.36 ಓಮೆರ್ ಎಂಬುದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಒಂದು ಅಳತೆಯ ಮಾಪನವಾಗಿದೆ.
17ದೇವರು ಬಂಡೆಯೊಳಗಿಂದ ನೀರನ್ನು ಬರಮಾಡಿದ್ದು
1ತರುವಾಯ ಇಸ್ರಾಯೇಲರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಮೇರೆಗೆ <<ಸೀನ್>> ಎಂಬ ಮರುಭೂಮಿಯಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿಯೂ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.2ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, <<ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು>> ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, <<ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?>> ಎಂದನು.3ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, <<ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?>> ಎಂದರು.4ಆಗ ಮೋಶೆ ಯೆಹೋವನಿಗೆ ಮೊರೆಯಿಟ್ಟು, <<ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ>> ಎಂದನು.5ಅದಕ್ಕೆ ಯೆಹೋವನು ಮೋಶೆಗೆ, <<ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು.6ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು>> ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.7ಇಸ್ರಾಯೇಲರು, <<ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?>> ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.ಅಮಾಲೇಕ್ಯರನ್ನು ಸೋಲಿಸಿದ್ದು
8ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಾಯೇಲರ ಸಂಗಡ ಯುದ್ಧಮಾಡಿದರು.9ಆಗ ಮೋಶೆಯು ಯೆಹೋಶುವನಿಗೆ, <<ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರೊಡನೆ ಯುದ್ಧಮಾಡಬೇಕು. ನಾನು ನಾಳೆ ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು>> ಎಂದು ಹೇಳಿದನು.10ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರೊಡನೆ ಯುದ್ಧಮಾಡಿದನು. ಮೋಶೆಯೂ, ಆರೋನನೂ ಮತ್ತು ಹೂರನು ಗುಡ್ಡದ ಮೇಲೆ ಏರಿ ಹೋದರು.11ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು.12ಮೋಶೆಯ ಕೈಗಳು ಭಾರವಾದಾಗ, ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದು ಇಟ್ಟರು. ಮೋಶೆಯು ಅದರ ಮೇಲೆ ಕುಳಿತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ನಿಂತುಕೊಂಡು ಮೋಶೆಯ ಕೈಗಳನ್ನು ಎತ್ತಿ ಹಿಡಿಯಲು ಸಹಾಯ ಮಾಡಿದರು. ಹೀಗೆ ಅವನ ಕೈಗಳು ಸೂರ್ಯನು ಮುಳುಗುವವರೆಗೆ ಕೆಳಗಿಳಿಸದೆ ಇದ್ದರು.13ಯೆಹೋಶುವನು ಅಮಾಲೇಕ್ಯರನ್ನು ಮತ್ತು ಅವರ ಭಟರನ್ನು ಖಡ್ಗದಿಂದ ಸೋಲಿಸಿದನು.14ಆಗ ಯೆಹೋವನು ಮೋಶೆಗೆ, <<ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು>> ಎಂದು ಹೇಳಿದನು.15ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ << ಯೆಹೋವ ನಿಸ್ಸಿ>> ಎಂದು ಹೆಸರಿಟ್ಟನು.16ಮೋಶೆಯು, <<ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು>> ಎಂದನು.
18ಇತ್ರೋವನು ಮೋಶೆಯನ್ನು ಭೇಟಿಮಾಡಿದ್ದು
1ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಕರತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದನು.2ಆಗ ಮೋಶೆಯ ಮಾವನಾದ ಇತ್ರೋವನು ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿಯಾದ ಚಿಪ್ಪೋರಳನ್ನೂ, ಆಕೆಯ ಇಬ್ಬರು ಗಂಡು ಮಕ್ಕಳನ್ನೂ ಕರೆದುಕೊಂಡು ಬಂದನು.3ಆ ಪುತ್ರರಲ್ಲಿ ಒಬ್ಬನಿಗೆ << ಗೇರ್ಷೋಮ್>> ಎಂದು ಹೆಸರಿಟ್ಟನು. ಏಕೆಂದರೆ ಮೋಶೆಯು, <<ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆ>> ಎಂದು ಹೇಳಿದನು.4ತನ್ನ ಇನ್ನೊಬ್ಬ ಮಗನಿಗೆ ಮೋಶೆಯು, <<ನನ್ನ ತಂದೆಯ ದೇವರು ನನಗೆ ಸಹಾಯಕನಾಗಿದ್ದು ನನ್ನನ್ನು ಫರೋಹನ ಕತ್ತಿಗೆ ತಪ್ಪಿಸಿ ಕಾಪಾಡಿದನು>> ಎಂದು ಹೇಳಿ, ಆ ಮಗನಿಗೆ << ಎಲೀಯೆಜೆರ್>> ಎಂದು ಹೆಸರಿಟ್ಟನು.5ಮೋಶೆಯ ಮಾವನಾದ ಇತ್ರೋವನು ಮೋಶೆಯ ಮಕ್ಕಳನ್ನು, ಹೆಂಡತಿಯನ್ನು ಕರೆದುಕೊಂಡು ಮರುಭೂಮಿಯಲ್ಲಿ ದೇವರ ಬೆಟ್ಟದ ಹತ್ತಿರ ಇಳಿದುಕೊಂಡಿದ್ದ ಮೋಶೆಯ ಬಳಿಗೆ ಬಂದನು.6ಅವನು ಮೋಶೆಗೆ, <<ನಿನ್ನ ಮಾವನಾದ ಇತ್ರೋವನಾದ ನಾನು ನಿನ್ನ ಹೆಂಡತಿಯನ್ನು, ನಿನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ>> ಎಂದು ಹೇಳಿ ಕಳುಹಿಸಿದನು.7ಮೋಶೆಯು ತನ್ನ ಮಾವನನ್ನು ಎದುರುಗೊಳ್ಳುವುದಕ್ಕೆ ಹೊರಟು ಆತನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಗೆ ಹೋದರು.8ಆ ನಂತರ ಮೋಶೆಯು ಯೆಹೋವನು ಇಸ್ರಾಯೇಲರ ಪರವಾಗಿ ಫರೋಹನಿಗೂ, ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ, ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ, ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ತನ್ನ ಮಾವನಿಗೆ ವಿವರಿಸಿದನು.9ಯೆಹೋವನು ಐಗುಪ್ತ್ಯರ ಕೈಯಿಂದ ಇಸ್ರಾಯೇಲರನ್ನು ಬಿಡಿಸಿ ಅವರಿಗೆ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ರೋವನು ಸಂತೋಷ ಪಟ್ಟನು.10ಇತ್ರೋವನು, <<ಐಗುಪ್ತ್ಯರ ಕೈಯಿಂದಲೂ, ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನಿಗೆ ಸ್ತೋತ್ರವಾಗಲಿ.11ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ>> ಅಂದನು.12ಇದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು.ನ್ಯಾಯಾಧಿಪತಿಗಳನ್ನು ನೇಮಿಸಿದ್ದು
(ಧರ್ಮೋ. 1:9-18)
13ಮರುದಿನ ಮೋಶೆ ಜನರಿಗೆ ನ್ಯಾಯತೀರಿಸುವುದಕ್ಕಾಗಿ ಕುಳಿತಿರಲು ಮುಂಜಾನೆಯಿಂದ ಸಾಯಂಕಾಲದವರೆಗೂ ಜನರು ಅವನ ಹತ್ತಿರ ನಿಂತಿದ್ದರು.14ಮೋಶೆಯು ಜನರಿಗಾಗಿ ಮಾಡುತ್ತಿರುವುದೆಲ್ಲವನ್ನು ಮಾವನು ನೋಡಿ ಅವನಿಗೆ, <<ನೀನು ಯಾತಕ್ಕೆ ಜನರಿಗಾಗಿ ಇಷ್ಟು ಪ್ರಯಾಸ ಪಡುತ್ತಿರುವೆ? ನೀನು ಒಬ್ಬನೇ ನ್ಯಾಯತೀರಿಸುವುದಕ್ಕೆ ಕುಳಿತಿರುವುದೇಕೆ?>> ಎಂದು ಕೇಳಿದನು.15ಮೋಶೆ ತನ್ನ ಮಾವನಿಗೆ, <<ದೇವರ ನಡೆಸುವಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ.16ಹಾಗೆಯೇ ಅವರೊಳಗೆ ವ್ಯಾಜ್ಯವೇನಾದರೂ ಉಂಟಾಗಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ ಅವರಿಗೆ ನ್ಯಾಯತೀರಿಸಿ ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ>> ಎಂದು ಹೇಳಿದನು.17ಅದನ್ನು ಕೇಳಿ ಮೋಶೆಯ ಮಾವನು ಅವನಿಗೆ, <<ನೀನು ಮಾಡುತ್ತಿರುವ ಈ ಕಾರ್ಯವಿಧಾನ ಸರಿಯಲ್ಲ.18ಈ ಕೆಲಸ ಬಹಳ ಕಷ್ಟವಾದದ್ದು. ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನು ನಿನ್ನ ಸಂಗಡ ಇರುವ ಈ ಜನರೂ ನಿಶ್ಚಯವಾಗಿ ಬಳಲಿಹೋಗುವಿರಿ.19ನನ್ನ ಮಾತನ್ನು ಕೇಳು. ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ, ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು.20ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು.21ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ತರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.22ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಸಣ್ಣ ವ್ಯಾಜ್ಯಗಳನ್ನೆಲ್ಲಾ ಅವರೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವುದರಿಂದ ನಿನಗೆ ಸುಲಭವಾಗುವುದು.23ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಈ ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಈ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು>> ಎಂದು ಹೇಳಿದನು.24ಮೋಶೆ ತನ್ನ ಮಾವನ ಮಾತಿಗೆ ಒಪ್ಪಿಕೊಂಡು ಅವನು ಹೇಳಿದಂತೆಯೇ ಎಲ್ಲವನ್ನು ಮಾಡಿದನು.25ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.26ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ, ಸುಲಭವಾದ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.27ತರುವಾಯ ಮೋಶೆ ತನ್ನ ಮಾವನಿಗೆ ಅಪ್ಪಣೆ ಕೊಡಲಾಗಿ, ಅವನು ಸ್ವದೇಶಕ್ಕೆ ಹೊರಟುಹೋದನು.
19ಇಸ್ರಾಯೇಲರು ಸೀನಾಯಿ ಬೆಟ್ಟಕ್ಕೆ ಬಂದದ್ದು
1ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.2ಇಸ್ರಾಯೇಲರು ರೇಫೀದೀಮನ್ನು ಬಿಟ್ಟು ಮರುಭೂಮಿಗೆ ಬಂದು ಮರುಭೂಮಿಯಲ್ಲಿ ಡೇರೆ ಹಾಕಿ ಸೀನಾಯಿ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು.3ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, <<ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿ ಹೇಳಬೇಕು.4<ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.5ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.6ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ> ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ>> ಅಂದನು.7ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.8ಜನರೆಲ್ಲರೂ ಒಗ್ಗಟ್ಟಾಗಿ, <<ಯೆಹೋವನು ಹೇಳಿದಂತೆಯೇ ಮಾಡುವೆವು>> ಎಂದು ಉತ್ತರಕೊಟ್ಟರು. ಮೋಶೆ ಯೆಹೋವನ ಬಳಿಗೆ ಹಿಂತಿರುಗಿ ಹೋಗಿ ಅವರು ಹೇಳಿದ ಮಾತುಗಳನ್ನು ಆತನಿಗೆ ಹೇಳಿದನು.9ಯೆಹೋವನು ಮೋಶೆಗೆ, <<ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ>> ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.10ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, <<ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,11ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.12ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, <ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.>13ಅಂಥವನನ್ನು ಯಾರೂ ಮುಟ್ಟಬಾರದು. ಕಲ್ಲೆಸೆದು ಅಥವಾ ಬಾಣವನ್ನು ಎಸೆದು ಖಂಡಿತವಾಗಿ ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ, ಪಶುಗಳಾಗಲಿ ಬೆಟ್ಟವನ್ನು ಮುಟ್ಟಿದರೆ ಸಾಯಲೇಬೇಕು. ಕೊಂಬಿನ ಧ್ವನಿ ದೀರ್ಘವಾಗಿ ಕೇಳಿಸಿದಾಗ ಅವರು ಬೆಟ್ಟದ ಸಮೀಪಕ್ಕೆ ಬರಬೇಕು>> ಎಂದು ಹೇಳು ಎಂದನು.14ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.15ಆಗ ಮೋಶೆ ಜನರಿಗೆ, <<ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು>> ಎಂದು ಹೇಳಿದನು.16ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.17ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಕರೆದುಕೊಂಡು ಬರಲು, ಅವರು ಬೆಟ್ಟದ ಕೆಳಗೆ ನಿಂತುಕೊಂಡರು.18ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.19ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.20ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.21ಆಗ ಯೆಹೋವನು ಮೋಶೆಗೆ, <<ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.22ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು>> ಎಂದು ಹೇಳಿದನು.23ಅದಕ್ಕೆ ಮೋಶೆ ಯೆಹೋವನಿಗೆ, <<ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ <ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು> >> ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು.24ಯೆಹೋವನು ಮೋಶೆಗೆ, <<ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು>> ಎಂದು ಹೇಳಿದನು.25ಮೋಶೆ ಜನರ ಬಳಿಗೆ ಇಳಿದುಹೋಗಿ ಆ ಮಾತುಗಳನ್ನು ಅವರಿಗೆ ತಿಳಿಸಿದನು.
20ದಶಾಜ್ಞೆಗಳು
(ಧರ್ಮೋ. 5:1-21)
1ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು:2<<ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ <ನಾನೇ ನಿನ್ನ ದೇವರು>3ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು.4<<ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.5ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.6ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.7ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.8<<ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.9ಆರು ದಿನಗಳು ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಿಕೊಳ್ಳಬೇಕು.10ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.11ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.12<<ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.13<<ಕೊಲೆ ಮಾಡಬಾರದು.14<<ವ್ಯಭಿಚಾರಮಾಡಬಾರದು.15<<ಕದಿಯಬಾರದು.16<<ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.17<<ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.>>ಜನರು ಭಯಪಟ್ಟಿದ್ದು
18ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.19ಅವರು ಮೋಶೆಗೆ, <<ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ>> ಎಂದು ಹೇಳಿದರು.20ಅದಕ್ಕೆ ಮೋಶೆಯು ಜನರಿಗೆ, <<ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ>> ಎಂದನು.21ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು.ಯಜ್ಞವೇದಿಯ ಬಗ್ಗೆ ನಿಯಮಗಳು
22ಯೆಹೋವನು ಮೋಶೆಗೆ ಹೀಗೆಂದನು, <<ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; <ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.23ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.24ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.25ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು.26ಅದಲ್ಲದೆ ನನ್ನ ಯಜ್ಞವೇದಿಯನ್ನು ನಿಮ್ಮ ನಗ್ನತೆಯು ಕಾಣುವ ಹಾಗೆ ಮೆಟ್ಟಲುಗಳನ್ನು ಬಳಸಿ ಅದನ್ನು ಹತ್ತಬಾರದು> >> ಎಂದು ಆಜ್ಞಾಪಿಸಿದನು.
21ದಾಸತ್ವದ ಕುರಿತಾದ ನ್ಯಾಯವಿಧಿಗಳು
(ಧರ್ಮೋ. 15:12-18)
1<<ಈಗ ನೀನು ಅವರ ಮುಂದೆ ಇಡಬೇಕಾದ ನ್ಯಾಯವಿಧಿಗಳು ಯಾವುದೆಂದರೆ;2<< <ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.3ಪುರುಷನು ಒಂಟಿಯಾಗಿ ಬಂದಿದ್ದರೆ ಒಂಟಿಯಾಗಿಯೇ ಹೊರಟುಹೋಗಬೇಕು. ಮದುವೆಯಾಗಿ ಬಂದಿದ್ದರೆ ಅವನ ಹೆಂಡತಿಯೂ ಅವನ ಜೊತೆ ಹೋಗಬೇಕು.4ಅವನ ಯಜಮಾನನು ಅವನಿಗೆ ಮದುವೆಮಾಡಿಸಿದ ಪಕ್ಷದಲ್ಲಿ ಆ ಹೆಂಡತಿಯಲ್ಲಿ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು. ದಾಸನು ಒಂಟಿಗನಾಗಿಯೇ ಹೊರಟುಹೋಗಬೇಕು.> >>5ಆದರೆ ದಾಸನು, <<ನಾನು ನನ್ನ ಯಜಮಾನನ್ನೂ, ನನ್ನ ಹೆಂಡತಿ ಮಕ್ಕಳನ್ನು ಪ್ರೀತಿಸುತ್ತೇನೆ. ಆದುದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ನನಗೆ ಮನಸಿಲ್ಲ>> ಎಂದು ಸ್ಪಷ್ಟವಾಗಿ ಹೇಳಿದರೆ,6ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.7ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು.8ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಮೆಚ್ಚಿಕೆಯಾಗದೆ ಹೋದರೆ ಅವಳನ್ನು ಬಿಡಿಸಿ ಕೊಲ್ಲುವುದಕ್ಕೆ ಅವನು ಅನುಮತಿ ನೀಡಬೇಕು. ಅವನು ಕೊಟ್ಟ ಮಾತಿಗೆ ತಪ್ಪಿದವನಾದ್ದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.9ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯ ಮಾಡಿಕೊಂಡರೆ ಮಗಳಂತೆ ಆಕೆಯನ್ನು ನೋಡಿಕೊಳ್ಳಬೇಕು.10ಯಜಮಾನನು ಇನ್ನೊಬ್ಬಳನ್ನು ಮದುವೆಯಾದರೆ ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕುಗಳನ್ನು ಕಡಿಮೆಮಾಡಬಾರದು.11ಈ ಮೂರರಲ್ಲಿ ಯಾವುದನ್ನೂ ನಡೆಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.ಹಿಂಸಾಚಾರಗಳ ಕುರಿತಾದ ನ್ಯಾಯವಿಧಿಗಳು
12ಮನುಷ್ಯನನ್ನು ಹೊಡೆದು ಕೊಂದವನು ಖಂಡಿತವಾಗಿ ಸಾಯಬೇಕು.13ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು.14ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.15ಯಾರಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಖಂಡಿತವಾಗಿ ಅವನು ಸಾಯಲೇಬೇಕು.16ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.17ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನಿಗೆ ಮರಣಶಿಕ್ಷೆಯಾಗಬೇಕು.18ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಠಿಯಿಂದಾಗಲೀ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು,19ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.20ಒಬ್ಬನು ತನ್ನ ದಾಸನನ್ನಾಗಲಿ, ದಾಸಿಯನ್ನಾಗಲಿ ಕೋಲಿನಿಂದ ಹೊಡೆದು ಸಾಯುವಂತೆ ಹೊಡೆದರೆ, ಅವನಿಗೆ ತಕ್ಕ ಶಿಕ್ಷೆಯಾಗಬೇಕು.21ಆ ದಾಸನು ಆಗಲೇ ಸಾಯದೆ ಒಂದೆರಡು ದಿನ ಬದುಕಿದ್ದರೆ, ಯಜಮಾನನಿಗೆ ಶಿಕ್ಷೆಯನ್ನು ವಿಧಿಸಕೂಡದು. ಏಕೆಂದರೆ ಆ ದಾಸನು ಅವನ ಸೊತ್ತಾಗಿದ್ದಾನೆ.22ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.23ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಬೇಕು.24ಕಣ್ಣಿಗೆ ಕಣ್ಣನ್ನು, ಹಲ್ಲಿಗೆ ಹಲ್ಲನ್ನು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,25ಬರೆಗೆ ಬರೆಯನ್ನು, ಗಾಯಕ್ಕೆ ಗಾಯವನ್ನು, ಏಟಿಗೆ ಏಟನ್ನು ಪ್ರತಿಯಾಗಿ ಕೊಡಬೇಕು.26ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ (ಬದಲಾಗಿ) ಅವರನ್ನು ಅವನು ಬಿಡುಗಡೆಮಾಡಿ ಕಳುಹಿಸಬೇಕು.27ಒಬ್ಬನು ದಾಸನ ಅಥವಾ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೆ ಈಡಾಗಿ ಅವರನ್ನು ಬಿಡುಗಡೆಮಾಡಿ ಕಳುಹಿಸಬೇಕು.ಅಸ್ತಿಪಾಸ್ತಿಗಳ ಕುರಿತಾದ ನ್ಯಾಯವಿಧಿಗಳು
28ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆದರೆ ಆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.29ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದು ಹಾಕಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಲ್ಲದೆ ಅದರ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.30ಆದರೆ ಯಜಮಾನನಿಗೆ ಹಣವನ್ನು ನೇಮಿಸಿದರೆ ಅವನು ತನಗೆ ನೇಮಕವಾದ ಹಣವನ್ನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಿ.31ಆ ಎತ್ತು ಮಗನನ್ನಾಗಲಿ ಅಥವಾ ಮಗಳನ್ನಾಗಲಿ ತಿವಿದರೆ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.32ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.33ಒಬ್ಬನು ಗುಂಡಿಯನ್ನು ಅಗೆದರೆ ಇಲ್ಲವೆ ಅಗೆದು ಅದನ್ನು ಮುಚ್ಚದೇ ಇದ್ದು ಅದರಲ್ಲಿ ಎತ್ತಾಗಲಿ, ಕತ್ತೆಯಾಗಲಿ ಆ ಗುಂಡಿಯಲ್ಲಿ ಬಿದ್ದು ಸತ್ತರೆ,34ಆ ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.35ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದು ಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನೂ ಇಬ್ಬರೂ ಸಮವಾಗಿ ಹಂಚಿಕೊಳ್ಳಬೇಕು.36ಆದರೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ಅದರ ಯಜಮಾನನಿಗೆ ತಿಳಿದಿದ್ದರೂ ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
22ಅಸ್ತಿಪಾಸ್ತಿಯನ್ನು ಕಾಪಾಡಿಕೊಳ್ಳುವುದರ ಕುರಿತು
1ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಬದಲಾಗಿ ನಾಲ್ಕು ಕುರಿಗಳನ್ನು ಕೊಡಬೇಕು.2ಒಬ್ಬ ಕಳ್ಳನು ಕಳ್ಳತನ ಮಾಡುತ್ತಿರುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಕೂಡದು.3ಸೂರ್ಯೋದಯವಾದ ನಂತರ ಒಬ್ಬನು ಕಳ್ಳತನಮಾಡಿ ಸಿಕ್ಕಿಬಿದ್ದಾಗ, ಅವನನ್ನು ಹೊಡೆದು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು.ಅವನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂತಿರುಗಿಸಬೇಕು. ಅವನಲ್ಲಿ ಕೊಡಲು ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ಗುಲಾಮನಾಗಿ ಮಾರಲ್ಪಡಬೇಕು.
4ಕಳ್ಳತನ ಮಾಡಿದ ಎತ್ತಾಗಲಿ, ಕತ್ತೆಯಾಗಲಿ, ಆಡು, ಕುರಿಯಾದರೂ ಜೀವದಿಂದಲೇ ಕದ್ದವನ ಬಳಿಯಲ್ಲಿ ಸಿಕ್ಕಿದರೆ ಅವನು ಎರಡರಷ್ಟು ಈಡು ಕೊಡಬೇಕು.5ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ತನ್ನ ದನಗಳನ್ನು ಮೇಯಿಸಿ, ಮತ್ತೊಬ್ಬನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಭಾಗವನ್ನು ಅವನಿಗೆ ಈಡು ಕೊಡಬೇಕು.6ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಬೆಂಕಿ ಹತ್ತಿಕೊಂಡು ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟು ಹೋದರೆ ಬೆಂಕಿ ಹೊತ್ತಿಸಿದವನು ಅದಕ್ಕೆ ಈಡುಕೊಡಬೇಕು.7ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಕಾಪಾಡುವುದಕ್ಕೆ ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ಮನುಷ್ಯನ ಮನೆಯಲ್ಲಿ ಕಳ್ಳತನವಾಗಿ, ಕಳ್ಳನು ಸಿಕ್ಕಿಕೊಂಡರೆ ಎರಡರಷ್ಟು ದಂಡವನ್ನು ಕೊಡಬೇಕು.8ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.9ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.10ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾಗಲಿ, ಎತ್ತನ್ನಾಗಲಿ, ಕುರಿಯನ್ನಾಗಲಿ ಬೇರೆ ಯಾವ ಪಶುವನ್ನಾಗಲಿ ಕಾಪಾಡುವುದಕ್ಕೆ ಕೊಟ್ಟಿದ್ದು, ಅದು ಸತ್ತರೆ ಇಲ್ಲವೆ ಗಾಯಗೊಂಡರೆ ಇಲ್ಲವೆ ಯಾರೂ ತಿಳಿಯದಂತೆ ಕಳ್ಳತನವಾದರೆ,11ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.12ಆದರೆ ಆ ಪಶುವು ಅವನ ಬಳಿಯಿಂದ ಕಳವಾದರೆ ಆ ವ್ಯಕ್ತಿ ಅದರ ಯಜಮಾನನಿಗೆ ಪ್ರತಿಯಾಗಿ ಈಡುಕೊಡಬೇಕು.13ಕಾಡುಮೃಗವು ಆ ಪಶುವನ್ನು ಕೊಂದಿದ್ದರೆ, ಅದರ ಹೆಣವನ್ನು ಗುರುತಿಗಾಗಿ ತೋರಿಸಲಿ. ಕಾಡುಮೃಗ ಕೊಂದಿದ್ದಕ್ಕೆ ಈಡು ಕೊಡಬೇಕಾದ ಅಗತ್ಯವಿಲ್ಲ.14ಒಬ್ಬನು ಮತ್ತೊಬ್ಬನಿಂದ ಪಶುವನ್ನು ಸ್ವಲ್ಪ ಕಾಲಕ್ಕೆ ಬಾಡಿಗೆಗೆ ತೆಗೆದುಕೊಂಡಿರಲಾಗಿ ಆ ಪಶುವಿನ ಒಡೆಯನು ಅದರ ಹತ್ತಿರವಿಲ್ಲದ ಸಮಯದಲ್ಲಿ ಅದು ಗಾಯಗೊಂಡರೆ ಇಲ್ಲವೆ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು.15ಯಜಮಾನನು ಅದರ ಹತ್ತಿರದಲ್ಲೇ ಇದಿದ್ದರೆ, ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಬೇಕು.ಸಮುದಾಯದಲ್ಲಿನ ನೈತಿಕ ನಿಯಮಗಳು
16ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಸಂಗಮಿಸಿದರೆ ಅವಳಿಗೋಸ್ಕರ ತಕ್ಕ ತೆರವನ್ನು ಕೊಟ್ಟು ಅವಳನ್ನು ಮದುವೆಮಾಡಿಕೊಳ್ಳಬೇಕು.17ಅವಳ ತಂದೆ ಅವಳನ್ನು ಅವನಿಗೆ ಕೊಡುವುದಕ್ಕೆ ಒಪ್ಪದೇ ಹೋದರೆ ಆ ಮನುಷ್ಯನು ತಕ್ಕ ಹಣವನ್ನು ದಂಡವಾಗಿ ಕೊಡಬೇಕು.18ಮಾಟಗಾರ್ತಿಯನ್ನು ಜೀವದಿಂದ ಉಳಿಸಬಾರದು.19ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.20ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.21ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದೀರಲ್ಲವೇ?22ವಿಧವೆಯರನ್ನಾಗಲಿ, ದಿಕ್ಕಿಲ್ಲದ ಮಕ್ಕಳನ್ನಾಗಲಿ, ತೊಂದರೆಪಡಿಸಬಾರದು.23ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿಡುವರು ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.24ನಾನು ಕೋಪಗೊಂಡು ನಿಮ್ಮ ಶತ್ರುಗಳನ್ನು ಕತ್ತಿಯಿಂದ ಸಂಹಾರಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.25ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.26ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡಬೇಕು.27ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು.28ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.29ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.30ಅದರಂತೆಯೇ ನಿಮ್ಮ ಕುರಿ, ದನಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿನಗಳ ಕಾಲ ಆ ಮರಿ ತನ್ನ ತಾಯಿಯೊಂದಿಗಿರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.31ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದುದರಿಂದ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಬಿಡಬೇಕು.
23ನ್ಯಾಯ ಮತ್ತು ಕರುಣೆಯ ಕುರಿತು ನಿಯಮಗಳು
1ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.2ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.3ಇದಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.4ನಿನ್ನ ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೋಗಿ ಒಪ್ಪಿಸಬೇಕು.5ನಿನ್ನನ್ನು ಹಗೆಮಾಡುವವನ ಕತ್ತೆಯ ಹೊರೆಯ ಕೆಳಗೆ ಬಿದ್ದಿರುವುದನ್ನು ಕಂಡರೆ, ಅದನ್ನು ಎಬ್ಬಿಸುವುದಕ್ಕೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಎಬ್ಬಿಸಲೇಬೇಕು.6ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು.7ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.8ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.9ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ.ಸಬ್ಬತ್ ದಿನ ಮತ್ತು ಸಬ್ಬತ್ ವರ್ಷದ ಕುರಿತಾದ ನಿಯಮಗಳು
10ಆರು ವರ್ಷ ನಿಮ್ಮ ಹೊಲವನ್ನು ಬಿತ್ತನೆಮಾಡಿ ಅದರ ಬೆಳೆಯನ್ನು ತೆಗೆದುಕೊಳ್ಳಿರಿ.11ಆದರೆ ಏಳನೆಯ ವರ್ಷದಲ್ಲಿ ಆ ಭೂಮಿಯನ್ನು ಉಳದೆ ಬೀಳುಬಿಡಬೇಕು. ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ಮತ್ತು ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಇದೇ ರೀತಿಯಲ್ಲಿ ಮಾಡಬೇಕು.12ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.13ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.ವಾರ್ಷಿಕ ಹಬ್ಬಗಳು
(ವಿಮೋ. 34:18-26; ಧರ್ಮೋ. 16:1-17)
14ನೀವು ವರ್ಷಕ್ಕೆ ಮೂರಾವರ್ತಿ ನನಗೆ ಹಬ್ಬಮಾಡಬೇಕು.15ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.16ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.17ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಕರ್ತನಾದ ಯೆಹೋವನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕು.18ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ಕೊಬ್ಬನ್ನು ಮರುದಿನದವರೆಗೆ ಇಡಲೇಬಾರದು.19ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.ಕಾನಾನ್ ದೇಶವನ್ನು ಗೆಲ್ಲುವುದರ ವಾಗ್ದಾನಗಳು
20ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.21ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.22ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.23ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು, ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು.24ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.25ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.26ನಿಮ್ಮ ದೇಶದಲ್ಲಿ ಗರ್ಭಪಾತವಾಗಲಿ, ಬಂಜೆತನವಾಗಲಿ ಇರುವುದೇ ಇಲ್ಲ. ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ದಯಪಾಲಿಸುವೆನು.27ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.28ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು.29ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯಾದೀತು.30ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುವೆನು.31ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.32ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.33ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರುದ್ಧವಾಗಿ ನೀವು ಪಾಪ ಮಾಡುವಂತೆ ಅವರು ಪ್ರೇರೇಪಿಸುವರು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವುದು.
24ಒಡಂಬಡಿಕೆಯ ರಕ್ತ
1ಯೆಹೋವನು ಮೋಶೆಗೆ, <<ನೀನು, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬಿದ್ದು ಆರಾಧಿಸಬೇಕು.2ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಬೇರೆ ಯಾರು ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು>> ಎಂದು ಹೇಳಿದನು.3ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, <<ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು>> ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.4ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.5ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.6ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.7ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, <<ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು>> ಅಂದರು.8ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, <<ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ>> ಅಂದನು.ಬೆಟ್ಟದಲ್ಲಿ ದೇವರೊಂದಿಗೆ
9ಮೋಶೆ, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಜನರು ಬೆಟ್ಟವನ್ನು ಹತ್ತಿದರು.10ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.11ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.ಮೋಶೆ ಸೀನಾಯ್ ಬೆಟ್ಟವನ್ನು ಹತ್ತಿದ್ದು
12ಯೆಹೋವನು ಮೋಶೆಗೆ, <<ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ>> ಎಂದು ಹೇಳಿದನು.13ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.14ಇದಕ್ಕೆ ಮೊದಲು ಅವನು ಹಿರಿಯರಿಗೆ, <<ನಾವು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲಿರುವರು. ಯಾರಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ>> ಎಂದು ಹೇಳಿದನು.15ಮೋಶೆಯು ಬೆಟ್ಟವನ್ನು ಹತ್ತಿದನು ಮತ್ತು ಮೇಘವು ಬೆಟ್ಟವನ್ನು ಆವರಿಸಿಕೊಂಡಿತು.16ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.17ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.18ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.
25ದೇವದರ್ಶನದ ಗುಡಾರವೂ ಅದರ ಕಾಣಿಕೆಗಳೂ
1ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,2<<ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.3ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು ಯಾವುವೆಂದರೆ, ಚಿನ್ನ, ಬೆಳ್ಳಿ, ಹಾಗೂ ತಾಮ್ರ ಎಂಬ ಲೋಹಗಳು,4ನೀಲಿ, ನೇರಳೆ, ರಕ್ತಗೆಂಪು ವರ್ಣಗಳುಳ್ಳ ದಾರಗಳೂ, ನಾರುಬಟ್ಟೆಗಳೂ, ಆಡು ಕೂದಲಿನ ಉಣ್ಣೆಯ ಬಟ್ಟೆಗಳೂ,5ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳೂ, ಜಾಲೀಮರವೂ,6ದೀಪಕ್ಕೆ ಬೇಕಾದ ಎಣ್ಣೆಯೂ, ಅಭಿಷೇಕ ತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳೂ,7ಮಹಾಯಾಜಕನ ಕವಚಕ್ಕೆ ಹಾಗೂ ಎದೆಗೆ ಧರಿಸುವ ಪದಕದ ಮೇಲೆ ಇರಿಸಲು ಬೇಕಾಗಿರುವ ಗೋಮೇಧಕರತ್ನಗಳು ಹಾಗೂ ಇತರ ರತ್ನಗಳೂ ಇವೇ.8<<ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು.9ನಾನು ನಿನಗೆ ತೋರಿಸುವ ಮಾದರಿಯಲ್ಲಿಯೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.ಒಡಂಬಡಿಕೆಯ ಪೆಟ್ಟಿಗೆ
10<<ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವು ಹಾಗೂ ಒಂದುವರೆ ಮೊಳ ಎತ್ತರವು ಆಗಿರಬೇಕು.11ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಹಾಗೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.12ನಾಲ್ಕು ಬಂಗಾರದ ಬಳೆಗಳನ್ನು ಅದರ ನಾಲ್ಕು ಮೂಲೆಗಳಲ್ಲಿರುವ ಒಂದೊಂದು ಕಾಲಿಗೂ ಎರಡೆರಡು ಬಳೆಗಳನ್ನು ಹಾಕಬೇಕು.13ಆ ಮಂಜೂಷವನ್ನು ಹೊರುವುದಕ್ಕಾಗಿ ನೀನು ಜಾಲೀಮರದ ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ,14ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.15ಆ ಕಂಬಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೇ ಅವುಗಳಲ್ಲಿಯೇ ಬಿಟ್ಟಿರಬೇಕು.16ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.17ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿರಬೇಕು.18ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.19ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಬೇಕು.20ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು.21ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು22ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.ರೊಟ್ಟಿಯ ಮೇಜು
23<<ನೀನು ಜಾಲೀಮರದಿಂದ ಒಂದು ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯೂ, ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು.24ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ, ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.25ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡ ಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ತೋರಣ ಕಟ್ಟಿಸಬೇಕು.26ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಬೇಕು.27ಆ ಬಳೆಗಳು ಅಡ್ಡಪಟ್ಟಿಗೆಗೆ ಅಂಟಿಕೊಂಡಿರಬೇಕು. ಮೇಜನ್ನು ಎತ್ತುವುದಕ್ಕಾಗಿ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.28ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳಿಂದಲೇ ಮೇಜನ್ನು ಎತ್ತಬೇಕು.29ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.30ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.ದೀಪ ಸ್ತಂಭ
31<<ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು.32ಕಂಬದ ಒಂದೊಂದು ಪಾರ್ಶ್ವದಲ್ಲಿಯೂ ಮೂರು ಮೂರು ಕೊಂಬೆಗಳಂತೆ ಹಾಗೆ ಆರು ಕೊಂಬೆಗಳೂ ಇರಬೇಕು.33ಪ್ರತಿಯೊಂದು ಕೊಂಬೆಗಳಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಹೂವುಗಳೂ ಮೊಗ್ಗುಗಳೂ ಇರಬೇಕು. ದೀಪಸ್ತಂಭದಿಂದ ಬರುವ ಆರು ಕೊಂಬೆಗಳನ್ನು ಹಾಗೆಯೇ ಮಾಡಿಸಬೇಕು.34ದೀಪಸ್ತಂಭದ ಕಂಬದಲ್ಲಿ ಪುಷ್ಪಗುಚ್ಛಗಳೂ, ಪುಷ್ಪಗಳೂ, ಮೊಗ್ಗುಗಳು ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳೂ ಇರಬೇಕು.35ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇರಬೇಕು.36ಪುಷ್ಪಪಾತ್ರೆಗಳೂ, ಕೊಂಬುಗಳೂ ಸಹಿತವಾದ ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕ ಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿಸಬೇಕು.37ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹಚ್ಚಿರಬೇಕು.38ದೀಪದ ಕುಡಿತೆಗೆಯುವ ಕತ್ತರಿಗಳೂ, ಕತ್ತರಿಸಿದ ಕುಡಿಗಳನ್ನು ಹಾಕುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.39ದೀಪಸ್ತಂಭವೂ ಅದರ ಎಲ್ಲಾ ಉಪಕರಣಗಳೂ ಒಂದು ತಲಾಂತು ಚೊಕ್ಕ ಬಂಗಾರವಾಗಿರಬೇಕು.40ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.>>
26ದೇವದರ್ಶನದ ಗುಡಾರ
(36:8-38)
1ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.2ಪ್ರತಿಯೊಂದು ಬಟ್ಟೆಯೂ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.3ಐದೈದು ಬಟ್ಟೆಯ ಪರದೆಗಳನ್ನು ಒಂದೊಂದಾಗಿ ಜೋಡಿಸಬೇಕು.4ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು.5ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದುರಾಗಿರಬೇಕು.6ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಪರದೆಗಳನ್ನು ಒಂದಕ್ಕೊಂದು ಹೆಣೆದು ಒಂದೇ ಗುಡಾರವಾಗುವಂತೆ ಜೋಡಿಸಬೇಕು.7ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡಿನ ರೋಮದಿಂದ ಹನ್ನೊಂದು ಪರದೆಗಳನ್ನು ಮಾಡಿಸಬೇಕು.8ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.9ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನು ಒಂದಾಗಿ ಜೋಡಿಸಿ ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ಇರಿಸಬೇಕು.10ಹೀಗೆ ಜೋಡಿಸಿ ಹೆಣೆದ ಪರದೆಗಳ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಬೇಕು.11ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವು ಸೇರಿ ಒಂದೇ ಗುಡಾರವಾಗುವಂತೆ ಜೋಡಿಸಬೇಕು.12ಹೊದಿಕೆಯ ಪರದೆಗಳಲ್ಲಿ ಅರ್ಧ ಪರದೆ ಹೆಚ್ಚಾಗಿರುವುದು, ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.13ಹೊದಿಕೆಯ ಪರದೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ, ಆ ಕಡೆ ಒಂದು ಮೊಳವೂ ಹೆಚ್ಚಾಗಿರುವುದು. ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ತೂಗಾಡುವಂತಿರಬೇಕು.14ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನು ಮಾಡಿಸಬೇಕು.ದೇವದರ್ಶನದ ಗುಡಾರದ ನಿರ್ಮಾಣ
15ಗುಡಾರಕ್ಕೆ ಬೇಕಾದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು.16ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಮತ್ತು ಒಂದೂವರೆ ಮೊಳ ಅಗಲವಾಗಿಯೂ ಇರಬೇಕು.17ಪ್ರತಿಯೊಂದು ಚೌಕಟ್ಟು ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆಯೇ ಮಾಡಿಸಬೇಕು.18ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ನಿಲ್ಲಿಸಬೇಕು.19ನಲ್ವತ್ತು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು (ಅಡಿಗಲ್ಲು) ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೆ ಕಲ್ಲು ಇರಬೇಕು.20ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿಯೂ ಇಪ್ಪತ್ತು ಚೌಕಟ್ಟುಗಳು,21ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆ ಕಲ್ಲುಗಳು ಇರಬೇಕು.22ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿಸಬೇಕು.23ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು.24ಅವುಗಳನ್ನು ಅಡಿಯಿಂದ ತುದಿಯವರೆಗೂ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು.25ಹೀಗೆ ಹಿಂಭಾಗದಲ್ಲಿ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಬೆಳ್ಳಿಯ ಗದ್ದಿಗೆ ಕಲ್ಲುಗಳೂ ಅಂತೂ ಹದಿನಾರು ಗದ್ದಿಗೆ ಕಲ್ಲುಗಳು ಇರಬೇಕು.26ಜಾಲೀಮರದಿಂದ ಅಗುಳಿಗಳನ್ನು ಮಾಡಿಸಬೇಕು. ಗುಡಾರದ ಎರಡು ಕಡೆಯ ಚೌಕಟ್ಟುಗಳಿಗೂ,27ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿಸಬೇಕು.28ಚೌಕಟ್ಟುಗಳ ಮಧ್ಯದಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಲುಪುವಂತಿರಬೇಕು.29ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿಸಬೇಕು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು.30ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ಬಿಡಿಸಬೇಕು.31ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.32ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ಪರದೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.33ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.34ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿರಿಸಬೇಕು.35ಪರದೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇರಿಸಬೇಕು. ಮೇಜು ಉತ್ತರ ಭಾಗದಲ್ಲಿರಬೇಕು.36ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು.37ಆ ಪರದೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗಾಗಿ ಐದು ತಾಮ್ರದ ಗದ್ದಿಗೆ ಕಲ್ಲುಗಳನ್ನು ಮಾಡಿಸಬೇಕು.
27ಯಜ್ಞವೇದಿ
(ವಿಮೋ. 38:1-7)
1ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ, ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು. ಅದರ ಎತ್ತರವು ಮೂರು ಮೊಳವಿರಬೇಕು.2ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಆ ಕೊಂಬುಗಳು ಯಜ್ಞವೇದಿಯಿಂದಲೇ ಬಂದವುಗಳಾಗಿರಬೇಕು. ಆ ಯಜ್ಞವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು.3ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ, ಮುಳ್ಳುಚಮಚಗಳನ್ನೂ, ಹಾಗೂ ಅಗ್ಗಿಷ್ಟಿಕೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.4ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಬೇಕು, ಆ ಜಾಲರಿಯ ನಾಲ್ಕು ಮೂಲೆಗಳಿಗೆ ತಾಮ್ರದ ಬಳೆಗಳನ್ನು ಹಾಕಿಸಬೇಕು.5ಆ ಜಾಲರಿಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗಿನವರೆಗೆ ಇದ್ದು ಯಜ್ಞವೇದಿಯ ಅಡಿಯಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.6ಯಜ್ಞವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ, ತಾಮ್ರದ ತಗಡುಗಳನ್ನು ಹೊದಿಸಬೇಕು.7ಆ ಕೋಲುಗಳನ್ನು ಆ ಬಳೆಗಳಲ್ಲಿ ಸೇರಿಸಿದಾಗ ಅವು ಯಜ್ಞವೇದಿಯನ್ನು ಹೊರುವುದಕ್ಕಾಗಿ ಅದರ ಎರಡೂ ಕಡೆಗಳಲ್ಲಿ ಇರಬೇಕು.8ಆ ಯಜ್ಞವೇದಿಯನ್ನು ಹಲಗೆಗಳಿಂದ ಟೊಳ್ಳಾದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆ ಅದನ್ನು ಮಾಡಿಸಬೇಕು.ಗುಡಾರದ ಅಂಗಳ
(ವಿಮೋ. 38:9-20)
9ಪರಿಶುದ್ಧ ಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ಆ ದಕ್ಷಿಣ ಭಾಗದ ಅಂಗಳಕ್ಕೆ ಪರದೆಗಳು ಇರಬೇಕು. ಆ ಪರದೆಗಳನ್ನು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿಸಬೇಕು. ಅವು ನೂರು ಮೊಳ ಉದ್ದವಾಗಿರಬೇಕು.10ಆ ಕಡೆಯಲ್ಲಿ ಇಪ್ಪತ್ತು ಕಂಬಗಳು. ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಪಟ್ಟಿಗಳೂ ಇರಬೇಕು.11ಅದೇ ರೀತಿಯಲ್ಲಿ ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳೂ, ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು ಕಂಬಗಳ ಕೊಂಡಿಗಳೂ, ಪಟ್ಟಿಗಳೂ ಬೆಳ್ಳಿಯವಾಗಿರಬೇಕು.12ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ಪರದೆಗಳೂ ಹತ್ತು ಕಂಬಗಳೂ, ಹತ್ತು ಗದ್ದಿಗೆ ಕಲ್ಲುಗಳೂ ಇರಬೇಕು.13ಪೂರ್ವದ ದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಿರಬೇಕು.14ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು.15ಮತ್ತೊಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು16ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆಯೂ ಇರಬೇಕು. ಅದನ್ನು ನಯವಾಗಿ ಹೊಸೆದ ನಾರಿನ ನೂಲು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ಗದ್ದಿಗೆ ಕಲ್ಲುಗಳು ಇರಬೇಕು.17ಅಂಗಳದ ಸುತ್ತಲಿರುವ ಎಲ್ಲಾ ಕಂಬಗಳಿಗೂ, ಬೆಳ್ಳಿಯ ಪಟ್ಟಿಗಳೂ, ಬೆಳ್ಳಿಯ ಕೊಂಡಿಗಳೂ, ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು.18ಅಂಗಳವು ನೂರು ಮೊಳ ಉದ್ದವಾಗಿಯೂ ಸುತ್ತಲೂ ಐವತ್ತು ಮೊಳ ಅಗಲವಾಗಿಯೂ ಇರಬೇಕು. ಅದರ ಸುತ್ತಲಿರುವ ಪರದೆಯು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿದ್ದು ಅದಕ್ಕೆ ಐದು ಮೊಳ ಎತ್ತರವಿರಬೇಕು. ಅದಕ್ಕೆ ತಾಮ್ರದ ಗದ್ದಿಗೆ ಕಲ್ಲುಗಳಿರಬೇಕು.19ಗುಡಾರದ ಸಕಲವಿಧವಾದ ಕೆಲಸಕ್ಕೆ ಬೇಕಾದ ಉಪಕರಣಗಳೂ, ಗುಡಾರದ ಗೂಟಗಳೂ, ಅಂಗಳದ ಗೂಟಗಳೂ ತಾಮ್ರದವುಗಳಾಗಿರಬೇಕು.ದೀಪಸ್ತಂಭದ ಎಣ್ಣೆ
(ಯಾಜ. 24:1-4)
20ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು.21ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.
28ಯಾಜಕರ ದೀಕ್ಷಾವಸ್ತ್ರಗಳು
(ವಿಮೋ. 39:1-7)
1ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.2ನಿನ್ನ ಅಣ್ಣನಾದ ಆರೋನನಿಗೆ ಗೌರವವೂ, ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು (ಪರಿಶುದ್ಧವಸ್ತುಗಳು) ಮಾಡಿಸಬೇಕು.3ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.4ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ , ಏಫೋದ್, ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.5ಜನರು ಕಾಣಿಕೆಯಾಗಿ ಕೊಡುವ ಚಿನ್ನವನ್ನು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರವನ್ನು, ಹಾಗೂ ನಾರಿನ ಬಟ್ಟೆಯನ್ನು ಆ ಕೆಲಸಕ್ಕಾಗಿ ಉಪಯೋಗಿಸಬೇಕು.ಏಫೋದ್
6ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಿ ಅದನ್ನು ಚಿನ್ನ, ನೀಲಿ, ನೇರಳೆ ಹಾಗೂ ಕಡುಗೆಂಪು ದಾರಗಳಿಂದಲೂ ಕಸೂತಿ ಹಾಕಿಸಿ ಅಲಂಕರಿಸಬೇಕು.7ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳು ಇರಬೇಕು. ಅದರ ಎರಡು ತುದಿಗಳು ಜೋಡಿಸಲ್ಪಟ್ಟಿರಬೇಕು.8ಕವಚದ ಮೇಲಿರುವ ಕಸೂತಿ ಕೆಲಸದ ನಡುಕಟ್ಟು ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಲ್ಪಟ್ಟು ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಅಲಂಕೃತವಾಗಿರಬೇಕು.9ಮತ್ತು ನೀನು ಎರಡು ಗೋಮೇಧಕ ಅಮೂಲ್ಯರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಬೇಕು.10ಒಂದು ರತ್ನದಲ್ಲಿ ಆರು ಹೆಸರುಗಳನ್ನೂ ಮತ್ತೊಂದು ರತ್ನದಲ್ಲಿ ಮಿಕ್ಕ ಆರು ಹೆಸರುಗಳನ್ನು ಅವರವರ ಜನನ ಕ್ರಮದ ಪ್ರಕಾರ ಕೆತ್ತಿಸಬೇಕು.11ಮುದ್ರೆಗಳನ್ನು ಕೆತ್ತುವ ಹಾಗೆ ಆ ಶಿಲ್ಪಿಗರಿಂದ ಎರಡೂ ರತ್ನಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ, ಅದಕ್ಕೆ ಚಿನ್ನವನ್ನು ಆ ಮುದ್ರೆಗಳ ಮೇಲೆ ಇರಿಸಬೇಕು.12ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು.13ಆ ರತ್ನಗಳನ್ನು ಜೋಡಿಸುವುದಕ್ಕೆ ಚಿನ್ನದ ಸರಿಗೆಯನ್ನು ಹೆಣೆದು ಗೂಡುಗಳನ್ನು ಮಾಡಿಸಬೇಕು.14ಮತ್ತು ಹೆಣಿಗೆ ಕೆಲಸದಿಂದ ಹುರಿಗಳಂತಿರುವ ಎರಡು ಚೊಕ್ಕ ಬಂಗಾರದ ಸರಪಣಿಗಳನ್ನು ಮಾಡಿಸಿ ರತ್ನಗಳ ಗೂಡುಗಳಿಗೆ ಸಿಕ್ಕಿಸಬೇಕು.ಎದೆಯ ಪದಕದ ಕವಚ
(ವಿಮೋ. 39:8-21)
15ನ್ಯಾಯತೀರ್ಪಿನ ಎದೆಯ ಪದಕದ ಕವಚವನ್ನು ಕಸೂತಿ ಕೆಲಸದಿಂದ ಮಾಡಿಸಬೇಕು. ಅದನ್ನು ಏಫೋದ್ ಅನ್ನು ಮಾಡಿಸಿದ ಹಾಗೆಯೇ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಬೇಕು.16ಅದು ಒಂದು ಗೇಣುದ್ದವಾಗಿಯೂ ಮತ್ತು ಒಂದು ಗೇಣಗಲವಾಗಿಯೂ ಎರಡು ಪದರುಳ್ಳದ್ದಾಗಿ ಚಚ್ಚೌಕವಾಗಿರಬೇಕು.17ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಹೆಚ್ಚಿಸಿರಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು ಇರಬೇಕು.18ಎರಡನೆಯ ಸಾಲಿನಲ್ಲಿ ಪಚ್ಚೆ, ನೀಲರತ್ನ ಮತ್ತು ವಜ್ರಗಳಿರಬೇಕು.19ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಸುಗಂಧಿ ಮತ್ತು ಪದ್ಮರಾಗಗಳು ಇರಬೇಕು.20ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಡೂರ್ಯಗಳನ್ನೂ ಚಿನ್ನದ ಮಣಿಗಳಲ್ಲಿ ಸೇರಿಸಬೇಕು.21ಇಸ್ರಾಯೇಲರ ಕುಲಗಳ ಸಂಖ್ಯೆಗೆ ಅನುಗುಣವಾಗಿ ಹನ್ನೆರಡು ರತ್ನಗಳಿರಬೇಕು. ಮುದ್ರೆಗಳನ್ನು ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.22ಅದಲ್ಲದೆ ಆ ಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕ ಬಂಗಾರದ ಸರಪಣಿಗಳನ್ನು ಹೆಣಿಗೆ ಕೆಲಸಗಳಿಂದ ಮಾಡಿಸಿಡಬೇಕು.23ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆಯ ಪದಕದ ಕವಚದ ಎರಡು ಮೂಲೆಗಳಿಗೆ ಜೋಡಿಸಬೇಕು.24ಆ ಎರಡು ಸರಪಣಿಗಳನ್ನು ಎದೆಯ ಪದಕದ ಕವಚದ ಮೂಲೆಗಳಲ್ಲಿರುವ ಕೊಂಡಿಗಳಿಗೆ ಸಿಕ್ಕಿಸಬೇಕು.25ಆ ಸರಪಣಿಗಳ ಕೊನೆಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಕೊಂಡಿಗಳಲ್ಲಿ ಸಿಕ್ಕಿಸಿ ಮುಂಭಾಗದಲ್ಲಿರಿಸಬೇಕು.26ಅದಲ್ಲದೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೆ ಇಡಿಸಬೇಕು.27ಮತ್ತು ಬೇರೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಏಫೋದ್ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಕಸೂತಿ ಹಾಕಿಸಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು.28ಎದೆಯ ಪದಕವು ಕಸೂತಿಹಾಕಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ, ಏಫೋದ್ ಕವಚದಿಂದ ಕಳಚಿಬೀಳದಂತೆಯೂ ಅದರ ಕೊಂಡಿಗಳನ್ನು ಏಫೋದ್ ಕವಚದ ಕೊಂಡಿಗಳಿಗೆ ನೀಲಿ ದಾರದಿಂದ ಕಟ್ಟಿಸಬೇಕು.29ನ್ಯಾಯತೀರ್ಪಿನ ಎದೆಯ ಪದಕದ ಮೇಲೆ ಇಸ್ರಾಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಆ ಹೆಸರುಗಳನ್ನು ಸತತವಾಗಿ ಯೆಹೋವನ ನೆನಪಿಗೆ ತರುವುದಕ್ಕಾಗಿ ಅದನ್ನು ತನ್ನ ಎದೆಯ ಮೇಲೆ ನಿತ್ಯವೂ ಧರಿಸುವನು.30ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು.ಯಾಜಕರ ಇತರ ವಸ್ತ್ರಗಳು
(ವಿಮೋ. 39:22-31)
31ಮಹಾಯಾಜಕನು ಏಫೋದ್ ಕವಚದ ಸಂಗಡ ಧರಿಸಿಕೊಳ್ಳಬೇಕಾದ ಮೇಲಂಗಿಯನ್ನು ನೀನು ನೀಲಿಬಣ್ಣದ ಬಟ್ಟೆಯಿಂದಲೇ ಮಾಡಿಸಬೇಕು.32ತಲೆತೂರಿಸುವುದಕ್ಕೆ ಅದರಲ್ಲಿ ಸಂದು ಇರಬೇಕು. ಅದು ಹರಿಯದಂತೆ ಆ ಸಂದಿನ ಸುತ್ತಲೂ ನೇಯಿಗೆ ಕಸೂತಿಯನ್ನು ಅದರೊಂದಿಗೆ ಒಂದು ಪಟ್ಟಿಯನ್ನು ಹಾಕಿಸಬೇಕು.33ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣುಗಳನ್ನು ಅವುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಹಾಕಿಸಬೇಕು.34ಚಿನ್ನದ ಗೆಜ್ಜೆಯೂ ದಾಳಿಂಬೆಯೂ ಒಂದಾದ ಮೇಲೆ ಒಂದು ಆ ನಿಲುವಂಗಿಯ ಅಂಚಿನ ಸುತ್ತಲೂ ಇರಬೇಕು.35ಆರೋನನು ಯಾಜಕ ಸೇವೆ ಮಾಡುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಯೆಹೋವನ ಸನ್ನಿಧಿಗೆ ಪವಿತ್ರಸ್ಥಾನದೊಳಗೆ ಹೋಗುವಾಗಲೂ ಬರುವಾಗಲೂ ಸಾಯದಂತಿರಲು ಆ ಗೆಜ್ಜೆಗಳ ಶಬ್ದವು ಕೇಳಿಸಬೇಕು.36ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ <<ಯೆಹೋವನಿಗೆ ಮೀಸಲು>> ಎಂಬ ಲಿಪಿಯನ್ನು ಕೆತ್ತಿಸಬೇಕು.37ಅದನ್ನು ಮುಂಡಾಸಕ್ಕೆ ಬಿಗಿಯುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿಸಬೇಕು. ಅದು ಮುಂಡಾಸದ ಮುಂಭಾಗದಲ್ಲಿ ಇರಬೇಕು.38ಇಸ್ರಾಯೇಲ್ಯರು ಕಾಣಿಕೆಯಾಗಿ ಸಮರ್ಪಿಸುವ ದೇವರ ಎಲ್ಲಾ ಪವಿತ್ರವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಆ ಪಟ್ಟವನ್ನು ಯಾವಾಗಲೂ ಹಣೆಯ ಮೇಲೆ ಧರಿಸಿ ಆ ದೋಷ ಫಲವನ್ನು ವಹಿಸಿಕೊಳ್ಳುವುದರಿಂದ ಅವರು ಯೆಹೋವನಿಗೆ ಮೆಚ್ಚಿಕೆಯುಳ್ಳವರಾಗಿರುವರು.39ಆರೋನನು ಧರಿಸಬೇಕಾದ ಒಳ ಅಂಗಿಯನ್ನು ಹತ್ತಿಯ ನೂಲಿನಿಂದ ಕಸೂತಿ ಹಾಕಿಸಿ ನೇಯಿಸಬೇಕು. ಅವನ ಮುಂಡಾಸವನ್ನು ಹತ್ತಿಯ ನೂಲಿನಿಂದ ಮಾಡಿಸಬೇಕು. ಅವನ ನಡುಕಟ್ಟನ್ನು ಕಸೂತಿ ಕೆಲಸದಿಂದ ಮಾಡಿಸಬೇಕು.40ಆರೋನನ ಮಕ್ಕಳಿಗೆ ತಕ್ಕ ಗೌರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು.41ಅವರು ನನಗೆ ಯಾಜಕಸೇವೆ ಮಾಡುವುದಕ್ಕಾಗಿ ಆ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ, ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಸೇವೆಗಾಗಿ ಪ್ರತಿಷ್ಠಿಸಿ ಶುದ್ಧೀಕರಿಸಿಬೇಕು.42ಅದಲ್ಲದೆ ಅವರ ನಗ್ನತೆಯನ್ನು ಮರೆಮಾಡುವುದಕ್ಕಾಗಿ ಅವರಿಗೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಸಣಬಿನ ದಾರದಿಂದ ಮಾಡಿಸಬೇಕು.43ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.
29ಯಾಜಕರನ್ನು ಪ್ರತಿಷ್ಠಿಸಬೇಕಾದ ಕ್ರಮ
(ಯಾಜ. 8:1-26)
1ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವುದಕ್ಕೆ ನೀನು ಮಾಡಬೇಕಾಗಿರುವ ಕಾರ್ಯಗಳೆನೆಂದರೆ; ಒಂದು ಹೋರಿ ಮತ್ತು ಕರುವನ್ನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು.2ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,3ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು. ಆ ನಂತರ ಆ ಪುಟ್ಟಿಯನ್ನು, ಹೋರಿಯನ್ನು ಮತ್ತು ಎರಡು ಟಗರುಗಳೊಂದಿಗೆ ತರಬೇಕು.4ಆಗ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸಬೇಕು.5ಆ ವಸ್ತ್ರಗಳನ್ನು ತೆಗೆದುಕೊಂಡು ಒಳ ಅಂಗಿಯನ್ನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳತಕ್ಕ ನಿಲುವಂಗಿಯನ್ನೂ, ಏಫೋದ್ ಕವಚವನ್ನು ಎದೆಯ ಪದಕವನ್ನೂ ಆರೋನನಿಗೆ ತೊಡಿಸಿ ಏಫೋದ್ ಕವಚದ ಕಸೂತಿ ಹಾಕಿದ ನಡುಕಟ್ಟನ್ನು ಕಟ್ಟಿಸಿ,6 ಅವನ ತಲೆಗೆ ಮುಂಡಾಸವನ್ನು ಹಾಕಿಸಿ, ಮುಂಡಾಸದ ಮೇಲೆ ಪವಿತ್ರ ಪಟ್ಟವನ್ನು ಕಟ್ಟಿಸಿ,7ಅಭಿಷೇಕತೈಲವನ್ನು ಅವನ ಮೇಲೆ ಸುರಿದು ಅವನನ್ನು ಅಭಿಷೇಕಿಸಬೇಕು.8ತರುವಾಯ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ಮೇಲಂಗಿಗಳನ್ನು ತೊಡಿಸಿ9ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು.10ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತಂದು, ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು.11ಆ ನಂತರ ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲೇ ವಧಿಸಬೇಕು.12ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.13ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.14ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.15ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.16ನೀನು ಅದನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚಿಮುಕಿಸಬೇಕು.17ಆ ನಂತರ ನೀನು ಆ ಟಗರನ್ನು ತುಂಡು ತುಂಡಾಗಿ ಕತ್ತರಿಸಿ ಅದರ ಕರಳುಗಳನ್ನೂ, ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನೂ, ತಲೆಯನ್ನೂ ಒಟ್ಟಿಗೆ ಇಡಬೇಕು.18ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.19ಆ ಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.20ನಂತರ ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ, ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲು ಚಿಮುಕಿಸಬೇಕು.21ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು.22ಪ್ರತಿಷ್ಠೆಗಾಗಿ ಸಮರ್ಪಿಸಲ್ಪಟ್ಟ ಟಗರಾಗಿರುವುದರಿಂದ ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಪಿತ್ತಕೋಶದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಕೋಶಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಹಾಗೂ ಬಲತೊಡೆಯನ್ನು,23ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಮತ್ತು ಒಂದು ಕಡುಬನ್ನು ತೆಗೆದುಕೊಂಡು,24ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ಅರ್ಪಿಸಬೇಕು.25ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಯೆಹೋವನಿಗಾಗಿ ಸುಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.26ಮತ್ತು ಆರೋನನ ಪಟ್ಟಾಭೀಷೇಕಕ್ಕಾಗಿ ಪ್ರತಿಷ್ಠಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲಾಗಿರುತ್ತದೆ.27ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.28ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.29ಆರೋನನ ಪವಿತ್ರವಾದ ಯಾಜಕದೀಕ್ಷಾವಸ್ತ್ರಗಳು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರು ಅದರಲ್ಲಿಯೇ ನನಗಾಗಿ ಅಭಿಷೇಕಿಸಿ ಪ್ರತಿಷ್ಠಿಸಬೇಕು.30ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.31ಆರೋನನು ಪ್ರತಿಷ್ಠೆಗಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಅಂಗಳದಲ್ಲಿ ಬೇಯಿಸಬೇಕು.32ಆರೋನನೂ ಅವನ ಮಕ್ಕಳೂ ಆ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನ ಗುಡಾರದ ಬಾಗಿಲೊಳಗೆ ಊಟಮಾಡಬೇಕು.33ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು.34ಪ್ರತಿಷ್ಠೆಗೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದ ವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ಪವಿತ್ರವಾದುದರಿಂದ ಯಾರೂ ಅದನ್ನು ತಿನ್ನಬಾರದು.35ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿನಗಳ ಕಾಲ ಹೀಗೆ ಅವರನ್ನು ಪ್ರತ್ಯೇಕಿಸಿ ಪ್ರತಿಷ್ಠಿಸಬೇಕು. ಆರೋನನನ್ನೂ ಅವನ ಮಕ್ಕಳನ್ನೂ ಸೇವೆಗೆ ಪ್ರತಿಷ್ಠಿಸಬೇಕು.36ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.37ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.ಪ್ರತಿನಿತ್ಯವೂ ಮಾಡಬೇಕಾದ ಸರ್ವಾಂಗಹೋಮದ ಕ್ರಮ
(ಅರಣ್ಯ. 28:1-8)
38ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.39ಅವುಗಳಲ್ಲಿ ಒಂದನ್ನು ಉದಯಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.40 ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.41ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಭೋಜನ ನೈವೇದ್ಯವನ್ನೂ, ಪಾನದ್ರವ್ಯವನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯ ಹೋಮವಾಗಿರುವುದು.42ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು.43ಅಲ್ಲಿಯೇ ನಾನು ಇಸ್ರಾಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ತೇಜಸ್ಸಿನಿಂದ ಆ ಸ್ಥಳವು ಪರಿಶುದ್ಧವಾಗಿರುವುದು.44ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಗೊಳಿಸುವೆನು. ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ನನಗೆ ಯಾಜಕ ಸೇವೆ ಮಾಡುವಂತೆ ಶುದ್ಧೀಕರಿಸುವೆನು.45ನಾನು ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು.46ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ನಾನೇ ಅವರ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು. ಅವರ ದೇವರಾದ ಯೆಹೋವನು ನಾನೇ.
30ಧೂಪವೇದಿ
(ವಿಮೋ. 37:25-28)
1<<ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.2ಅದು ಒಂದು ಮೊಳ ಉದ್ದವಾಗಿಯು, ಒಂದು ಮೊಳ ಅಗಲವಾಗಿಯೂ ಇದ್ದು ಚಚ್ಚೌಕವಾಗಿರಬೇಕು. ಅದರ ಎತ್ತರವು ಎರಡು ಮೊಳವಾಗಿರಬೇಕು. ಅದರ ಕೊಂಬುಗಳು ಅದರಿಂದಲೇ ಆಗಿರಬೇಕು.3ಅದರ ಮೇಲ್ಭಾಗಕ್ಕೆ, ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು.4ಅದರ ತೋರಣದ ಕೆಳಗೆ ಯಜ್ಞವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ಯಜ್ಞವೇದಿಯನ್ನು ಹೊರುವುದಕ್ಕೆ ಕಂಬಗಳನ್ನು ಅವುಗಳಲ್ಲಿ ಸೇರಿಸಬೇಕು.5ಆ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.6ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.7<<ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ8ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು.9ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.10ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.>>ಗುಡಾರಕ್ಕಾಗಿ ಕೊಡಬೇಕಾದ ಕಾಣಿಕೆ
11ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,12<<ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.13ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.14ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು.15ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು.16ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.>>ತ್ರಾಮದ ತೊಟ್ಟಿಯ
17ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,18<<ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು.19ಆರೋನನೂ ಅವನ ಮಕ್ಕಳೂ ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು.20ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.21ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.>>ಅಭಿಷೇಕ ತೈಲ
22ಇದಲ್ಲದೆ ಯೆಹೋವನು ಮೋಶೆಗೆ ಪುನಃ ಹೇಳಿದ್ದೇನೆಂದರೆ,23<<ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ,24ಐನೂರು ಸುಗಂಧವಾದ ಚೆಕ್ಕೆ, ಮತ್ತು ಒಂದು ಹೀನ್ ಒಲೀವ್ ಎಣ್ಣೆ ಇವುಗಳನ್ನೆಲ್ಲಾ ತೆಗೆದುಕೊಂಡು,25ಸುಗಂಧ ದ್ರವ್ಯಕಾರರ ಪದ್ದತಿಯ ಮೇರೆಗೆ ಮಿಶ್ರಮಾಡಿ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡಿಸಬೇಕು. ಇದು ಪರಿಶುದ್ಧವಾದ ಅಭಿಷೇಕ ತೈಲವಾಗಿರುವುದು.26ಆದುದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು,27ದೀಪಸ್ತಂಭ, ದೀಪಸ್ತಂಭದ ಉಪಕರಣಗಳು,28ಧೂಪವೇದಿ, ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು ಹಾಗು ನೀರಿನ ತೊಟ್ಟಿ ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಬೇಕು.29ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.30ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಶುದ್ಧೀಕರಿಸಬೇಕು.>>31ನೀನು ಇಸ್ರಾಯೇಲರಿಗೆ ಆಜ್ಞಾಪಿಸತಕ್ಕದ್ದೇನೆಂದರೆ, <<ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಪರಿಶುದ್ಧ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.32ಜನರು ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನದ ಮೇರೆಗೆ ಬೇರೆ ಕೆಲಸಕ್ಕಾಗಿ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು. ಇದು ಪರಿಶುದ್ಧವಾದದ್ದು ಎಂದು ನೀವು ತಿಳಿದುಕೊಳ್ಳಬೇಕು.33ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.>>ಪರಿಮಳ ಧೂಪ
34ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, <<ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು,35ಸುಗಂಧ ದ್ರವ್ಯ ತಯಾರಿಸುವವರ ಕೌಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು.36ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು.37ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಿಕೊಳ್ಳಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪವಿತ್ರ ಪದಾರ್ಥವೆಂದು ಭಾವಿಸಬೇಕು.38ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.>>
31ಗುಡಾರದ ನಿರ್ಮಾಣಕ್ಕೆ ಕೆಲಸಗಾರರ ಆಯ್ಕೆ
(ವಿಮೋ. 35:30—36:1)
1ಯೆಹೋವನು ಮೋಶೆಗೆ ಹೀಗೆಂದನು,2<<ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ.3ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,4ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸಗಳನ್ನು ಮಾಡುವುದಕ್ಕೂ,5ಅವನಿಗೆ ದೇವರಾತ್ಮವನ್ನು ದಯಪಾಲಿಸಿ, ಅದಕ್ಕೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪ ಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.6ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.7ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,8ಮೇಜು ಅದರ ಉಪಕರಣಗಳು, ಚೊಕ್ಕ ಬಂಗಾರದ ದೀಪಸ್ತಂಭ ಅದರ ಉಪಕರಣಗಳು,9ಧೂಪವೇದಿ, ಯಜ್ಞವೇದಿ ಅದರ ಉಪಕರಣಗಳು, ನೀರಿನ ತೊಟ್ಟಿ ಅದರ ಪೀಠ,10ಅಲಂಕಾರವಾದ ದೀಕ್ಷಾವಸ್ತ್ರಗಳು ಅಂದರೆ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು,11ಅಭಿಷೇಕತೈಲ ಮತ್ತು ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.>>ಸಬ್ಬತ್ ದಿನದ ನಿಯಮ
12ಯೆಹೋವನು ಮತ್ತೆ ಮೋಶೆಗೆ ಹೀಗೆಂದನು,13<<ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೇ ಆಚರಿಸಬೇಕು. ನಿಮ್ಮನ್ನು ಶುದ್ಧಿಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯ ಇರುವ ಗುರುತು.14ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.15ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು.16ಆದುದರಿಂದ ಇಸ್ರಾಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ, ಅವರ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.17ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?>>18ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.
32ಬಂಗಾರದ ಹೋರಿಕರು
(ಧರ್ಮೋ. 9:6-29)
1ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, <<ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ>> ಎಂದು ಹೇಳಿದರು.2ಅದಕ್ಕೆ ಆರೋನನು ಅವರಿಗೆ, <<ನಿಮ್ಮ ಹೆಂಡತಿಯರ ಹಾಗು ಗಂಡುಹೆಣ್ಣು ಮಕ್ಕಳ ಕಿವಿಯಲ್ಲಿ ಹಾಕಿಕೊಂಡಿರುವ ಚಿನ್ನದ ಓಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ>> ಎಂದು ಹೇಳಿದನು.3ಅವರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ಓಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದು ಕೊಟ್ಟರು.4ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು <<ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು>> ಎಂದು ಹೇಳಿದರು.5ಆರೋನನು ಅದನ್ನು ನೋಡಿದಾಗ ಹೋರಿಕರುವಿಗೆ ಎದುರಾಗಿ ಒಂದು ಯಜ್ಞವೇದಿಯನ್ನು ಕಟ್ಟಿಸಿ, <<ನಾಳೆ ಯೆಹೋವನಿಗೆ ಹಬ್ಬವಾಗಬೇಕು>> ಎಂದು ಪ್ರಕಟಿಸಿದನು.6ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು.7ಹೀಗಿರಲಾಗಿ ಯೆಹೋವನು ಮೋಶೆಗೆ, <<ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.8ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, <ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ> >> ಎಂದು ಹೇಳಿದನು.9ಅದಲ್ಲದೆ ಯೆಹೋವನು ಮೋಶೆಗೆ, <<ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ. ಇವರು ಮೊಂಡುತನವುಳ್ಳ ಜನರಾಗಿದ್ದಾರೆ10ಆದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು>> ಎಂದು ಹೇಳಿದನು.11ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, <<ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?12ಐಗುಪ್ತ್ಯರು ನಿನ್ನ ವಿಷಯದಲ್ಲಿ, <ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?> ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.13ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, <ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ> >> ಅಂದನು.14ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.15ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು. ಈ ಕಡೆಯೂ ಆ ಕಡೆಯೂ ಬರಹವಿತ್ತು.16ಆ ಶಿಲಾಶಾಸನಗಳು ದೇವರ ಕೆಲಸವೇ ಆಗಿದ್ದು, ಅವುಗಳಲ್ಲಿ ಕೆತ್ತಿದ ಅಕ್ಷರಗಳು ದೇವರೇ ಬರೆದದ್ದಾಗಿತ್ತು.17ಇಸ್ರಾಯೇಲರು ಉತ್ಸಾಹದಿಂದ ಕೂಗಾಡುತ್ತಾ ಇರಲಾಗಿ ಯೆಹೋಶುವನು ಆ ಶಬ್ದವನ್ನು ಕೇಳಿ, <<ಪಾಳೆಯದ ಕಡೆಯಿಂದ ಯುದ್ಧಧ್ವನಿ ಕೇಳಿಸುತ್ತದೆ>> ಎಂದು ಮೋಶೆಗೆ ಹೇಳಿದನು.18ಅದಕ್ಕವನು,<<ನನಗೆ ಕೇಳಿಸುವುದು ಜಯ ಧ್ವನಿಯೂ ಅಲ್ಲ, ವಿಜಯಗೀತೆಯೂ ಅಲ್ಲ
ಸೋತು ಗೋಳಾಡುವವರ ಧ್ವನಿಯೂ ಅಲ್ಲ,
ಗಾನಮಾಡುವವರ ಉಲ್ಲಾಸದ ಧ್ವನಿಯೇ ಆಗಿದೆ>> ಅಂದನು.
19ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.20ಜನರು ಮಾಡಿಸಿಕೊಂಡಿದ್ದ ಹೋರಿಕರುವನ್ನು ಅವನು ಬೆಂಕಿಯಿಂದ ಸುಟ್ಟು ಅರೆದು ಪುಡಿ ಪುಡಿ ಮಾಡಿ ನೀರಿನಲ್ಲಿ ಕಲಸಿ ಇಸ್ರಾಯೇಲರಿಗೆ ಆ ನೀರನ್ನು ಕುಡಿಸಿದನು.21ಆಗ ಮೋಶೆ ಆರೋನನನ್ನು ಕುರಿತು, <<ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?>> ಎಂದು ವಿಚಾರಿಸಲು,22ಆರೋನನು, <<ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?23ಅವರು ನನ್ನ ಬಳಿಗೆ ಬಂದು, <ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ಒಬ್ಬ ದೇವರನ್ನು ಮಾಡಿಸಿಕೊಡು, ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆಗೆ ಏನಾಯಿತೋ ಗೊತ್ತಿಲ್ಲ> ಅಂದರು.24ಅದಕ್ಕೆ ನಾನು <ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರೂ ಅದನ್ನು ಬಿಚ್ಚಿ ನನಗೆ ಕೊಡಬೇಕು> ಅಂದೆನು. ಅವರು ಹಾಗೆ ಕೊಡಲಾಗಿ ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರುವಿನ ರೂಪವು ಉಂಟಾಯಿತು>> ಅಂದನು.25ಮೋಶೆಯು ಜನರು ಅಂಕೆ ತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಸಡಿಲವಾಗಿ ಬಿಟ್ಟಿದ್ದರಿಂದ ಅವನ ವಿರೋಧಿಗಳು ಅಪಹಾಸ್ಯಮಾಡುವುದಕ್ಕೆ ಆಸ್ಪದವಾಯಿತು,26ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, <<ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು>> ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು.27ಮೋಶೆ ಅವರಿಗೆ, <<ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, <ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು> >> ಎಂದು ಹೇಳಿದನು.28ಲೇವಿಯ ಕುಲದವರು ಮೋಶೆಯ ಆಜ್ಞೆಯ ಪ್ರಕಾರವೇ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.29ಮೋಶೆಯು ಲೇವಿಯರಿಗೆ, <<ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಸಹೋದರರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೇ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಂಡಿದ್ದೀರಿ. ಆದುದರಿಂದ ಆತನು ಈ ದಿನ ನಿಮ್ಮನ್ನು ಆಶೀರ್ವದಿಸುವನು>> ಎಂದು ಹೇಳಿದನು.ಮೋಶೆಯು ಇಸ್ರಾಯೇಲರಿಗಾಗಿ ಬೇಡಿಕೊಂಡದ್ದು
30ಮರುದಿನದಲ್ಲಿ ಮೋಶೆಯು ಜನರಿಗೆ, <<ನೀವು ಮಹಾ ಪಾಪವನ್ನು ಮಾಡಿರುವಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು. ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಪ್ರಾಯಶ್ಚಿತ್ತವನ್ನು ನಾನು ಮಾಡಬಹುದೇನೋ>> ಎಂದು ಹೇಳಿದನು.31ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, <<ಅಯ್ಯೋ! ಈ ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ.32ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ>> ಎಂದು ಪ್ರಾರ್ಥಿಸಿದನು.33ಅದಕ್ಕೆ ಯೆಹೋವನು ಮೋಶೆಗೆ, <<ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದರೋ ಅವರ ಹೆಸರುಗಳನ್ನೇ ನನ್ನ ಬಳಿಯಲ್ಲಿರುವ ಪುಸ್ತಕದಿಂದ ನಾನು ಅಳಿಸಿಬಿಡುವೆನು.34ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.>>35ಇಸ್ರಾಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿಕೊಂಡಿದ್ದರಿಂದ ಯೆಹೋವನು ಅವರನ್ನು ದಂಡಿಸಿದನು.
33ಸೀನಾಯಿ ಬೆಟ್ಟವನ್ನು ಬಿಟ್ಟುಹೋಗಬೇಕೆಂಬ ಆಜ್ಞೆ
1ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, <<ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, <ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು> ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.2ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.3 ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸಿಬಿಟ್ಟೇನು>> ಅಂದನು.4ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.5ಯೆಹೋವನು ಮೋಶೆಗೆ ಹೀಗೆಂದನು. <<ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, <ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು> >> ಅಂದನು.6ಅದರಂತೆಯೇ ಇಸ್ರಾಯೇಲ್ಯರು ಹೋರೇಬ್ ಬೆಟ್ಟದಿಂದ ಮುಂದೆ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.ದೇವದರ್ಶನ ಗುಡಾರ
7ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿದ್ದನು. ಅದಕ್ಕೆ ದೇವದರ್ಶನದ ಗುಡಾರ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರೂ ಪಾಳೆಯದ ಹೊರಗಿದ್ದ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.8ಮೋಶೆಯು ಆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರೂ ಎದ್ದು ತಮ್ಮ ತಮ್ಮ ಡೇರೆಗಳ ಬಾಗಿಲಲ್ಲಿ ನಿಂತು, ಮೋಶೆಯು ಆ ಗುಡಾರದೊಳಕ್ಕೆ ಹೋಗುವ ತನಕ ಅವನನ್ನು ನೋಡುತ್ತಿದ್ದರು.9ಮೋಶೆಯು ಆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು ಹಾಗು ಯೆಹೋವನು ಮೋಶೆಯ ಸಂಗಡ ಮಾತನಾಡುತ್ತಿದ್ದನು.10ಆ ಮೇಘಸ್ತಂಭವು ಗುಡಾರದ ಬಾಗಿಲಲ್ಲಿ ನಿಂತಿದ್ದನ್ನು ಜನರೆಲ್ಲರೂ ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು.11ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.ಮೋಶೆಯ ಪ್ರಾರ್ಥನೆ
12ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, << <ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು> ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. <ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ> ನೀನು ನನಗೆ ಹೇಳಿರುವೆಯಲ್ಲಾ.13ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ>> ಎಂದು ಅರಿಕೆಮಾಡಿದನು.14ಅದಕ್ಕೆ ಯೆಹೋವನು, <<ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು>> ಅಂದನು.15ಮೋಶೆಯು ಆತನಿಗೆ, <<ನಿನ್ನ ಪ್ರಸನ್ನತೆಯು ನಮ್ಮ ಸಂಗಡ ಬಾರದೇ ಹೋದರೆ ನಮ್ಮನ್ನು ಇಲ್ಲಿಂದ ಹೋಗಗೊಡಿಸಬೇಡ.16ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು>> ಅಂದನು.17ಯೆಹೋವನು ಮೋಶೆಗೆ, <<ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು>> ಎಂದು ಹೇಳಿದನು.18ಅದಕ್ಕೆ ಮೋಶೆಯು, <<ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು>> ಎಂದು ಕೇಳಿದನು.19ಸರ್ವೋತ್ತಮತ್ವವನ್ನು ಅದಕ್ಕೆ ಆತನು, <<ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು>> ಅಂದನು.20ಆದರೆ ಆತನು ಅವನಿಗೆ, <<ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು>> ಎಂದು ಹೇಳಿದನು.21ಮತ್ತು ಯೆಹೋವನು ಅವನಿಗೆ, <<ನೋಡು, ಇಲ್ಲಿ ನನ್ನ ಸಮೀಪದಲ್ಲೇ ಒಂದು ಸ್ಥಳವಿದೆ. ನೀನು ಈ ಬಂಡೆಯ ಮೇಲೆಯೇ ನಿಂತುಕೊಂಡಿರು.22ನನ್ನ ಮಹಿಮೆಯು ನಿನ್ನೆದುರಿಗೆ ದಾಟಿಹೋಗುವಾಗ ನಾನು ಈ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ ನನ್ನ ಮುಂದೆ ದಾಟಿ ಹೋಗುವ ತನಕ ನಿನ್ನನ್ನು ಕೈಯಿಂದ ಮರೆಮಾಡುವೆನು.23ತರುವಾಯ ನಾನು ನನ್ನ ಕೈಯನ್ನು ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವಿಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವುದಿಲ್ಲ>> ಎಂದು ಯೆಹೋವನು ಆಜ್ಞಾಪಿಸಿದನು.
34ಮೋಶೆಯು ಹೊಸ ಕಲ್ಲಿನ ಹಲಗೆಗಳನ್ನು ಮಾಡಿದ್ದು.
(ಧರ್ಮೋ. 10:1-5)
1ಯೆಹೋವನು ಮೋಶೆಗೆ, <<ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.2ಬೆಳಿಗ್ಗೆ ನೀನು ಸಿದ್ಧನಾಗಿ, ಸೀನಾಯಿ ಬೆಟ್ಟವನ್ನು ಹತ್ತಿ ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.3ಯಾರೂ ನಿನ್ನ ಜೊತೆಯಲ್ಲಿ ಬೆಟ್ಟದ ಮೇಲಕ್ಕೆ ಬರಬಾರದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಬಳಿಯಲ್ಲಿ ಮೇಯಬಾರದು>> ಎಂದು ಹೇಳಿದನು.4ಆದಕಾರಣ ಮೋಶೆಯು ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡು, ಯೆಹೋವನ ಅಪ್ಪಣೆಯ ಮೇರೆಗೆ ಬೆಳಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು.5ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.6ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; <<ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;7ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ>> ಎಂಬುದೇ.8ಮೋಶೆ ತ್ವರೆಪಟ್ಟು ನೆಲಕ್ಕೆ ಬಾಗಿ ನಮಸ್ಕರಿಸಿ,9<<ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು>> ಎಂದನು.ಒಡಂಬಡಿಕೆಯ ನವೀಕರಣ
(ವಿಮೋ. 23:14-19; ಧರ್ಮೋ. 7:1-5; 16:1-17)
10ಯೆಹೋವನು ಹೇಳಿದ್ದೇನೆಂದರೆ, <<ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.11ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು.12ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.13ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.14ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.15ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,16ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.17ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು.18<<ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ?19<<ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ದನ ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ.20ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು; ಹಾಗೆ ಬಿಡಿಸಲೊಲ್ಲದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಬದಲು ಕೊಟ್ಟು ಬಿಡಿಸಿಕೊಳ್ಳಲೇ ಬೇಕು. ಒಬ್ಬರೂ ಬರಿಗೈಯಲ್ಲಿ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.21<<ಆರು ದಿನಗಳು ನಿಮ್ಮ ಕೆಲಸವನ್ನು ಮಾಡಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಸ್ವಸ್ಥರಾಗಿರಬೇಕು. ಉಳುವ ಕಾಲದಲ್ಲಿಯೂ, ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.22<<ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.23ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಬರಬೇಕು.24ನಾನು ನಿಮ್ಮ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ನೀವು ವರ್ಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂಮಿಯನ್ನು ಆಶೆಪಟ್ಟು ಅಪಹರಿಸುವುದಿಲ್ಲ.25<<ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದ ಸೂರ್ಯೋದಯದವರೆಗೂ ಉಳಿಸಿಕೊಳ್ಳಬಾರದು.26ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.>>27ಯೆಹೋವನು ಮೋಶೆಗೆ, <<ನೀನು ಈ ವಾಕ್ಯಗಳನ್ನು ಬರೆ, ಏಕೆಂದರೆ ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ>> ಎಂದು ಅಜ್ಞಾಪಿಸಿದನು.28ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.ಪ್ರಕಾಶಮಾನವಾದ ಮೋಶೆಯ ಮುಖ
29ಮೋಶೆಯು ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದುಬಂದಾಗ ಅವನು ಯೆಹೋವನ ಸನ್ನಿಧಿಯಲ್ಲಿ ಇದ್ದು ಆತನ ಸಂಗಡ ಸಂಭಾಷಿಸಿದ್ದರಿಂದ ಅವನ ಮುಖವು ಪ್ರಕಾಶಮಾನವಾಗಿತ್ತು; ಆದರೆ ಅ ಪ್ರಭಾವವು ಅವನಿಗೆ ತಿಳಿದಿರಲಿಲ್ಲ.30ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಆರೋನನೂ ಇಸ್ರಾಯೇಲರೆಲ್ಲರೂ ನೋಡಿ ಅವನ ಹತ್ತಿರಕ್ಕೆ ಬರುವುದಕ್ಕೆ ಭಯಪಟ್ಟರು.31ಆದರೆ ಮೋಶೆಯು ಅವರನ್ನು ಕರೆಯಲು ಆರೋನನೂ ಸಮೂಹದ ನಾಯಕರೆಲ್ಲರೂ ಅವನ ಬಳಿಗೆ ಬಂದರು; ಮೋಶೆ ಅವರ ಸಂಗಡ ಮಾತನಾಡಿದನು.32ತರುವಾಯ ಇಸ್ರಾಯೇಲರೆಲ್ಲರೂ ಹತ್ತಿರಕ್ಕೆ ಬಂದರು. ಮೋಶೆಯು ತಾನು ಸೀನಾಯಿಬೆಟ್ಟದಲ್ಲಿ ಯೆಹೋವನಿಂದ ಹೊಂದಿದ ಆಜ್ಞೆಗಳನ್ನೆಲ್ಲಾ ಅವರಿಗೆ ತಿಳಿಸಿದನು.33ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸಿದ ನಂತರ ತನ್ನ ಮುಖದ ಮೇಲೆ ಮುಸುಕುಹಾಕಿಕೊಂಡನು.34ಮೋಶೆಯು ಯೆಹೋವನ ಸಂಗಡ ಮಾತನಾಡಬೇಕೆಂದು ಆತನ ಸನ್ನಿಧಿಗೆ ಹೋಗುವಾಗಲೆಲ್ಲಾ ಈ ಮುಸುಕನ್ನು ಹಾಕಿಕೊಳ್ಳುತ್ತಿದ್ದನು. ಹೊರಗೆ ಬಂದಾಗ ಆ ಮುಸುಕನ್ನು ತೆಗೆದಿಡುತ್ತಿದ್ದನು. ಅವನು ಹೊರಗೆ ಬಂದಾಗ ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸುತ್ತಿದ್ದನು.35ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಇಸ್ರಾಯೇಲರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ಪುನಃ ಹಾಕಿಕೊಂಡಿರುತ್ತಿದ್ದನು.
35ಸಬ್ಬತ್ ದಿನದ ನಿಯಮಗಳು
1ಮೋಶೆ ಇಸ್ರಾಯೇಲರ ಸಮೂಹವನ್ನೆಲ್ಲಾ ಸೇರಿಸಿ ಅವರಿಗೆ, <<ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಹೀಗೆ ಅಪ್ಪಣೆ ಮಾಡಿದ್ದಾನೆ.2ಆರು ದಿನಗಳು ನೀವು ಕೆಲಸ ಮಾಡಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾಗಿರುವುದರಿಂದ ಅಂದು ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು; ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು;3ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು>> ಹೇಳಿದನು.ದೇವದರ್ಶನ ಗುಡಾರದ ನಿರ್ಮಾಣಕ್ಕೆ ಬೇಕಾದ ವಸ್ತುಗಳು
(ವಿಮೋ. 25:1-9)
4ಮೋಶೆಯು ಇಸ್ರಾಯೇಲ್ಯರ ಸರ್ವಸಮೂಹಕ್ಕೆ ಹೀಗೆಂದನು: <<ಯೆಹೋವನು ಆಜ್ಞಾಪಿಸಿದ್ದೇನೆಂದರೆ,5ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,6ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಗಳು, ಉಣ್ಣೆಯ ಬಟ್ಟೆಗಳು,7ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳು, ಜಾಲೀಮರವು, ದೀಪಕ್ಕೆ ಬೇಕಾದ ಎಣ್ಣೆಯು,8ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು,9ಏಫೋದ್ ಕವಚಕ್ಕೆ ಬೇಕಾಗಿರುವ ರತ್ನಗಳು ಹಾಗು ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳು ಇವೇ.ದೇವದರ್ಶನ ಗುಡಾರದ ನಿರ್ಮಾಣಕ್ಕೆ ಬೇಕಾದ ಉಪಕರಣಗಳು
(ವಿಮೋ. 39:32-43)
10<<ನಿಮ್ಮಲ್ಲಿರುವ ಜ್ಞಾನಿಗಳಾದ ಶಿಲ್ಪಿಗಳು ಬಂದು ಯೆಹೋವನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು.11ಅವರು ಮಾಡಬೇಕಾದವುಗಳು ಯಾವುವೆಂದರೆ; ದೇವದರ್ಶನದ ಗುಡಾರ, ಅದರ ಮೇಲ್ಹೊದಿಕೆಗಳು, ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು,12ಆಜ್ಞಾಶಾಸನಗಳ ಮಂಜೂಷ, ಅದನ್ನು ಹೊರುವ ಕಂಬಗಳು, ಕೃಪಾಸನ, ಅದನ್ನು ಮರೆಮಾಡುವ ಪರದೆ,13ಮೇಜು, ಅದರ ಕಂಬಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ನೈವೇದ್ಯದ ರೊಟ್ಟಿಗಳು,14ದೀಪಸ್ತಂಭ, ಅದರ ಉಪಕರಣಗಳು, ಹಣತೆಗಳು, ದೀಪಕ್ಕೆ ಬೇಕಾದ ಎಣ್ಣೆ,15ಧೂಪವೇದಿ, ಅದರ ಕಂಬಗಳು, ಅಭಿಷೇಕ ತೈಲ, ಪರಿಮಳಧೂಪದ್ರವ್ಯ, ಗುಡಾರದ ಬಾಗಿಲಿನ ಪರದೆ,16ಯಜ್ಞವೇದಿ, ಅದರ ತಾಮ್ರದ ಜಾಳಿಗೆ, ಕಂಬಗಳು, ಉಪಕರಣಗಳು, ಬೋಗುಣಿ, ಅದರ ಪೀಠ,17ಅಂಗಳದ ತೆರೆಗಳು, ಕಂಬಗಳು, ಗದ್ದಿಗೆಕಲ್ಲುಗಳು, ಅಂಗಳದ ಬಾಗಿಲಿನ ಪರದೆ,18ಗುಡಾರದ ಗೂಟಗಳು, ಅಂಗಳದ ಗೂಟಗಳು, ಇವುಗಳ ಹಗ್ಗಗಳು,19ಪವಿತ್ರಸ್ಥಾನದ ಸೇವೆಗೆ ಬೇಕಾದ ಸುಂದರವಾದ ದೀಕ್ಷಾವಸ್ತ್ರಗಳು ಅಂದರೆ ಮಹಾಯಾಜಕನಾದ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು ಇವೇ>> ಅಂದನು.ದೇವದರ್ಶನ ಗುಡಾರದ ನಿರ್ಮಾಣಕ್ಕೆ ಕಾಣಿಕೆಗಳು
20ಇಸ್ರಾಯೇಲರು ಮತ್ತು ಸಮೂಹದವರೆಲ್ಲರೂ ಮೋಶೆಯ ಎದುರಿನಿಂದ ಹೊರಟು ಹೋದರು.21ಯಾರನ್ನು ಹೃದಯವು ಪ್ರೇರೇಪಿಸಿತೋ, ಯಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಸಮಸ್ತ ಸೇವೆಗಳಿಗಾಗಿಯೂ, ಪವಿತ್ರ ವಸ್ತ್ರಗಳಿಗಾಗಿಯೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.22ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.23ಯಾರಲ್ಲಿ ನೀಲಿ, ನೇರಳೆ ಹಾಗು ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಯು, ಉಣ್ಣೆ ಬಟ್ಟೆಯು, ಹದಮಾಡಿದ ಕೆಂಪುಬಣ್ಣದ ಟಗರಿನ ತೊಗಲುಗಳು ಹಾಗು ಕಡಲಪ್ರಾಣಿಯ ತೊಗಲುಗಳು ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು.24ಯಾರಲ್ಲಿ ಬೆಳ್ಳಿ ಇಲ್ಲವೇ ತಾಮ್ರ ಇತ್ತೋ ಅವರು ಅವುಗಳನ್ನೇ ತಂದು ಯೆಹೋವನಿಗೆ ಸಮರ್ಪಿಸಿದರು. ಯಾರ ಬಳಿಯಲ್ಲಿ ಗುಡಾರದ ಕೆಲಸಕ್ಕೆ ಬೇಕಾದ ಜಾಲೀಮರವಿತ್ತೋ ಅವರು ಅದನ್ನು ತಂದುಕೊಟ್ಟರು.25ನಿಪುಣೆಯರಾದ ಸ್ತ್ರೀಯರು ತಮ್ಮ ಕೈಗಳಿಂದ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲನ್ನೂ, ಹತ್ತಿಯ ನೂಲನ್ನೂ ನೇಯ್ದು ಆ ನೂಲನ್ನು ತಂದುಕೊಟ್ಟರು.26ಬುದ್ಧಿವಂತೆಯರಾದ ಬೇರೆ ಸ್ತ್ರೀಯರು ಆಡಿನ ಕೂದಲುಗಳನ್ನು ನೇಯ್ದು ತಂದುಕೊಟ್ಟರು.27ಅಧಿಪತಿಗಳು ಏಫೋದ್ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನು, ಎದೆಪದಕದಲ್ಲಿ ಇಡಬೇಕಾದ ರತ್ನಗಳನ್ನು,28ದೀಪಕ್ಕೆ ಬೇಕಾದ ಎಣ್ಣೆಯನ್ನು ಹಾಗು ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳನ್ನು ತಂದುಕೊಟ್ಟರು.29ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.ಗುಡಾರದ ಶಿಲ್ಪಿಗಳು
(ವಿಮೋ. 31:1-11)
30ಮೋಶೆಯು ಇಸ್ರಾಯೇಲ್ಯರಿಗೆ ಹೀಗೆಂದನು, <<ನೋಡಿರಿ, ಯೆಹೋವನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಹೆಸರು ಹಿಡಿದು ಕರೆದಿದ್ದಾನೆ.31ಕಲಾತ್ಮಕವಾದ ವಿನ್ಯಾಸಗಳನ್ನು ಕಲ್ಪಿಸುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,32ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸವನ್ನು ಮಾಡುವುದಕ್ಕೂ,33ಅವನಿಗೆ ದೇವರಾತ್ಮವನ್ನು ಕೊಟ್ಟು ಅವನಿಗೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.34ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೂ ಮತ್ತು ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನಿಗೂ ವರಕೊಟ್ಟಿದ್ದೇನೆ.35ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.>>
361<<ಬೆಚಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು>> ಅಂದನು.ಇಸ್ರಾಯೇಲ್ಯರು ಮನಃಪೂರ್ವಕವಾಗಿ ಕಾಣಿಕೆಗಳನ್ನು ಕೊಟ್ಟದ್ದು
2ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.3ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.4ಆಗ ದೇವಮಂದಿರದ ಕೆಲಸವನ್ನು ಮಾಡುತ್ತಿದ್ದ ಆ ಜ್ಞಾನಿಗಳೆಲ್ಲರು,5ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ, <<ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾಗಿರುವುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ ಎಂದು>> ಹೇಳಿದರು.6ಆಗ ಮೋಶೆಯು ಇದನ್ನು ಗಮನಿಸಿ, <<ದೇವಮಂದಿರದ ಕೆಲಸಕ್ಕಾಗಿ ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಇನ್ನು ಮುಂದೆ ಕಾರ್ಯಗಳನ್ನೂ ಮಾಡಬಾರದು>> ಎಂದು ಅಪ್ಪಣೆಮಾಡಿ ಅದನ್ನು ಪಾಳೆಯದಲ್ಲಿ ಪ್ರಕಟಿಸಿದನು. ಜನರು ಕಾಣಿಕೆಗಳನ್ನು ತರುವುದನ್ನು ನಿಲ್ಲಿಸಿಬಿಟ್ಟರು.7ಏಕೆಂದರೆ ಕೆಲಸವನ್ನೆಲ್ಲಾ ಮಾಡುವುದಕ್ಕೆ ಸಾಕಾಗುವುದಕ್ಕಿಂತಲೂ ಹೆಚ್ಚು ಸಾಮಗ್ರಿಗಳಿದ್ದವು.ದೇವದರ್ಶನ ಗುಡಾರದ ನಿರ್ಮಾಣ
(ವಿಮೋ. 26:1-37)
8ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.9ಪ್ರತಿಯೊಂದು ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು. ಎಲ್ಲಾ ಪರದೆಗಳು ಸಮಾನ ಅಳತೆಯಲ್ಲಿದ್ದವು.10ಐದೈದು ಪರದೆಗಳನ್ನು ಒಂದೊಂದಾಗಿ ಜೋಡಿಸಿದರು.11ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ12ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು; ಆ ಕುಣಿಕೆಗಳನ್ನು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿ ಇರಿಸಿದರು.13ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು; ಹೀಗೆ ಅದು ಒಂದೇ ಗುಡಾರ ಆಯಿತು.14ಬೆಚಲೇಲನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಉಣ್ಣೆಯ ಹನ್ನೊಂದು ಪರದೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದನು.15ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು; ಎಲ್ಲಾ ಪರದೆಗಳೂ ಒಂದೇ ಅಳತೆಯಾಗಿದ್ದವು.16ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನೂ ಒಂದಾಗಿ ಜೋಡಿಸಿದರು.17ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿದರು.18ಒಂದೇ ಡೇರೆಯಾಗುವಂತೆ ಸಮಸ್ತವನ್ನು ಜೋಡಿಸುವುದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು.19ಅದಲ್ಲದೆ ಹದಮಾಡಿರುವ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ, ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು.20ಗುಡಾರಕ್ಕೆ ಜಾಲೀಮರದಿಂದ ನೆಟ್ಟಗೆ ನಿಂತಿರುವ ಹಲಗೆಗಳಿಂದ ಚೌಕಟ್ಟುಗಳನ್ನು ಮಾಡಿದರು.21ಪ್ರತಿಯೊಂದು ಚೌಕಟ್ಟೂ ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು;22ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿಸಿದರು.23ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು;24ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಮಾಡಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೆಕಲ್ಲನ್ನು ಇಟ್ಟರು.25ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು26ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೆಕಲ್ಲುಗಳ ಮೇರೆಗೆ ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲಗಳನ್ನು ಮಾಡಿದರು.27ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿದರು.28ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು.29ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯವರೆಗೂ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು.30ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆಕಲ್ಲುಗಳೂ ಒಟ್ಟು ಹದಿನಾರು ಗದ್ದಿಗೆಕಲ್ಲುಗಳಿದ್ದವು.31ಜಾಲೀಮರದಿಂದ ಅಗುಳಿಗಳನ್ನು ಮಾಡಿದರು.32ಗುಡಾರದ ಎರಡು ಕಡೆಗಳ ಚೌಕಟ್ಟುಗಳಿಗೂ ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿದರು.33ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು.34ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು.35ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು.36ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ ನಾಲ್ಕು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಎರಕಹೊಯಿಸಿದರು.37ಡೇರೆಯ ಬಾಗಿಲಿಗೆ ಹುರಿ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿಹಾಕಿ ಪರದೆಯನ್ನು ಮಾಡಿದರು.38ಆ ಪರದೆಯನ್ನು ತೂಗು ಹಾಕುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ ಅವುಗಳ ಸುತ್ತಲ ಮೆಟ್ಟಿಲುಗಳಿಗೂ, ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ತಳಭಾಗಗಳನ್ನು ತಾಮ್ರದಿಂದ ಮಾಡಿದರು.
37ಆಜ್ಞಾಶಾಸನಗಳ ಪೆಟ್ಟಿಗೆ
(ವಿಮೋ. 25:10-22)
1ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿದನು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ ಹಾಗೂ ಒಂದುವರೆ ಮೊಳ ಎತ್ತರವೂ ಆಗಿತ್ತು.2ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಮತ್ತು ಒಳಗಡೆಯೂ ಹೊದಿಸಿದನು. ಅದರ ಮೇಲೆ ಸುತ್ತಲು ಚಿನ್ನದ ಕಿರೀಟವನ್ನು ಕಟ್ಟಿಸಿದನು.3ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಅಂದರೆ, ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು.4ಮತ್ತು ಜಾಲೀಮರದ ಕಂಬಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.5ಮಂಜೂಷವನ್ನು ಹೊರುವುದಕ್ಕಾಗಿ ಕಂಬಗಳನ್ನು ಮಂಜೂಷದ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅದನ್ನು ಸಿಕ್ಕಿಸಿದನು.6ಇದಲ್ಲದೆ ಚೊಕ್ಕಬಂಗಾರದಿಂದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿತ್ತು.7ಬೆಚಲೇಲನು ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಗಳ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿಸಿದನು.8ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಗಳನ್ನು ಮಾಡಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಿದನು.9ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ, ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.ರೊಟ್ಟಿಯ ಮೇಜನ್ನು ಮಾಡಿದ್ದು
(ವಿಮೋ. 25:23-30)
10ಬೆಚಲೇಲನು ಜಾಲೀಮರದಿಂದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.11ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣಗಳನ್ನು ಕಟ್ಟಿದನು.12ಮೇಜಿನ ಸುತ್ತಲು ಅಂಗೈ ಅಗಲದ ಅಡ್ಡಪಟ್ಟಿಗಳನ್ನು ಮಾಡಿ ಅದಕ್ಕೂ ನಾಲ್ಕು ಚಿನ್ನದ ತೋರಣ ಕಟ್ಟಿದನು.13ಮೇಜನ್ನು ಎತ್ತುವ ಕಂಬಗಳನ್ನು ಸೇರಿಸುವುದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಜೋಡಿಸಿದನು.14ಆ ಬಳೆಗಳು ಅಡ್ಡಪಟ್ಟಿಗೆ ಸೇರಿಕೊಂಡಿದ್ದವು.15ಮೇಜನ್ನು ಹೊತ್ತುಕೊಂಡು ಹೋಗುವವರಿಗಾಗಿ ಜಾಲೀಮರದಿಂದ ಕಂಬಗಳನ್ನು ಮಾಡಿ, ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.16ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.ಬಂಗಾರದ ದೀಪಸ್ತಂಭವನ್ನು ಮಾಡಿದ್ದು
(ವಿಮೋ. 25:31-40)
17ಮತ್ತು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು. ಅದರ ಬುಡವನ್ನು ಮತ್ತು ಕಂಬವನ್ನು ನಕಾಸಿಕೆಲಸದಿಂದ ಮಾಡಿದನು. ಆ ದೀಪಸ್ತಂಭವನ್ನು ಅಖಂಡವಾಗಿ ಪುಷ್ಪದಗೊಂಚಲುಗಳು, ಪುಷ್ಪಗಳು, ಮೊಗ್ಗುಗಳು ಅಲಂಕಾರವಾಗಿ ಅದರಿಂದಲೇ ಹೊರಟಂತೆ ಕೆತ್ತಲಾಗಿತ್ತು.18ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳಂತೆ ಒಟ್ಟು ಆರು ಕೊಂಬೆಗಳು ಇದ್ದವು.19ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಕೃತಿಗಳಿದ್ದವು; ಒಂದೊಂದು ಆಕೃತಿಗೆ ಒಂದೊಂದು ಪುಷ್ಪವೂ, ಒಂದು ಮೊಗ್ಗು ಇದ್ದವು. ಆರು ಕೊಂಬೆಗಳಲ್ಲಿಯೂ ಹಾಗೆಯೇ ಇದ್ದವು.20ದೀಪಸ್ತಂಭದಲ್ಲಿ ಬಾದಾಮಿ ಹೂವುಗಳಂತಿರುವ ಪುಷ್ಪಗಳೂ, ಮೊಗ್ಗುಗಳೂ ಇರುವ ಹೂ ಗೊಂಚಲುಗಳಂತೆ ನಾಲ್ಕು ಪುಷ್ಪಾಕೃತಿಗಳು ಇದ್ದವು.21ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು, ಕೊಂಬೆಗಳ ಕೆಳಗೆ ಕವಲೊಡೆದಿರುವ ಜಾಗಗಳಲ್ಲಿಯೂ ಒಂದೊಂದು ಮೊಗ್ಗು ಹೀಗೆ ಕೊಂಬೆಗಳ ಆರು ಶಾಖೆಗಳಲ್ಲಿಯೂ ಮೊಗ್ಗುಗಳಿದ್ದವು.22ಮೊಗ್ಗುಗಳು, ಶಾಖೆಗಳು ಒಂದೇ ಕಡೆಯಿಂದ ಉದ್ಭವಗೊಂಡಿದ್ದವು. ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ಏಕವಾಗಿ ಮಾಡಲಾಗಿತ್ತು.23ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.24ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.ಧೂಪವೇದಿಯನ್ನು ಮಾಡಿದ್ದು
(ವಿಮೋ. 30:1-5)
25ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿಸಿದನು. ಅದು ಒಂದು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯು ಇದ್ದು ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು.26ಅದರ ಮೇಲ್ಭಾಗಕ್ಕೂ ಹಲಗೆಗಳಿಗೂ ನಾಲ್ಕು ಪಕ್ಕಗಳಲ್ಲಿದ್ದ ಹಲಗೆಗಳಿಗೂ ಮತ್ತು ಕೊಂಬುಗಳಿಗೂ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿಸಿದನು.27ಅದನ್ನು ಎತ್ತುವ ಕೋಲುಗಳನ್ನು ಸೇರಿಸುವುದಕ್ಕಾಗಿ ತೋರಣದ ಕೆಳಗೆ ವೇದಿಕೆಯ ಎರಡು ಪಾರ್ಶ್ವಗಳ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಜೋಡಿಸಿದನು.28ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.ಅಭಿಷೇಕ ತೈಲವನ್ನು ಧೂಪದ್ರವ್ಯವನ್ನು ಮಾಡಿದ್ದು
(ವಿಮೋ. 30:22-38)
29ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು.
38ಯಜ್ಞವೇದಿಯನ್ನು ಕಟ್ಟಿದ್ದು
(ವಿಮೋ. 27:1-8)
1ಅವನು ದಹನ ಬಲಿಯ ಯಜ್ಞವೇದಿಯನ್ನು ಜಾಲೀಮರದಿಂದ ಕಟ್ಟಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.2ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಯಿಂದಲೇ ಮಾಡಲ್ಪಟ್ಟಿದ್ದವು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು.3ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.4ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಿದನು. ಅದು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು.5ಯಜ್ಞವೇದಿಯನ್ನು ಎತ್ತಿ ಹಿಡಿಯುವ ಕಂಬಗಳನ್ನು ಸೇರಿಸುವುದಕ್ಕಾಗಿ ತಾಮ್ರದ ಜಾಲರಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿಸಿದನು.6ಯಜ್ಞವೇದಿಯನ್ನು ಹೊರುವ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಿದನು.7ಎರಡು ಬದಿಗಳಲ್ಲಿರುವ ಬಳೆಗಳಲ್ಲಿ ಅವುಗಳನ್ನು ಸೇರಿಸಿದನು. ಆ ಯಜ್ಞವೇದಿಯನ್ನು ಹಲಗೆಗಳಿಂದ ಬರಿದಾಗಿರುವ ಒಂದು ಪೆಟ್ಟಿಗೆಯಂತೆ ಮಾಡಿಸಿದನು.8ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು.ಗುಡಾರದ ಅಂಗಳವನ್ನು ಮಾಡಿದ್ದು
(ವಿಮೋ. 27:9-19)
9ಗುಡಾರಕ್ಕೆ ಅಂಗಳವನ್ನು ಮಾಡಿಸಿದನು. ಆ ಅಂಗಳದ ದಕ್ಷಿಣದಿಕ್ಕಿನಲ್ಲಿ ಇದ್ದ ಪರದೆಗಳು ನಯವಾದ ನಾರಿನ ಬಟ್ಟೆಯಿಂದ ಮಾಡಲಾಗಿತ್ತು, ನೂರುಮೊಳ ಉದ್ದವಾಗಿದ್ದವು.10ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಹಾಗೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.11ಉತ್ತರದ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳಿದ್ದವು ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.12ಪಶ್ಚಿಮ ಕಡೆಯಲ್ಲಿ ಐವತ್ತು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಹತ್ತು ಕಂಬಗಳೂ ಹತ್ತು ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವಾಗಿದ್ದವು.13ಪೂರ್ವದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಾಗಿತ್ತು.14-15ಅಲ್ಲಿ ಬಾಗಿಲಿನ ಎರಡೂ ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೆಕಲ್ಲುಗಳೂ ಇದ್ದವು.16ಅಂಗಳದ ಸುತ್ತಲಿರುವ ಪರದೆಗಳೆಲ್ಲವು ನಯವಾಗಿ ಹೆಣೆದ ಹತ್ತಿಯ ಬಟ್ಟೆಯಿಂದ ಮಾಡಲ್ಪಟ್ಟಿದ್ದವು;17ಕಂಬಗಳ ಗದ್ದಿಗೆಕಲ್ಲುಗಳು ತಾಮ್ರದವುಗಳು; ಕಂಬಗಳ ಕೊಂಡಿಗಳೂ, ಕಟ್ಟುಗಳೂ ಬೆಳ್ಳಿಯವು; ಅವುಗಳ ಬೋದಿಗೆಗಳು ಬೆಳ್ಳಿಯ ತಗಡುಗಳಿಂದ ಹೊದಿಸಲ್ಪಟ್ಟವು. ಅಂಗಳದ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳಿದ್ದವು.18ಅಂಗಳದ ಬಾಗಿಲಲ್ಲಿದ್ದ ಪರದೆಯು ನಯವಾದ ಹತ್ತಿಯ ಬಟ್ಟೆಯಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಕಸೂತಿ ಕೆಲಸದವರ ಕೈಯಿಂದ ಮಾಡಿದ ಹಾಗೆಯೇ ಮಾಡಲ್ಪಟ್ಟಿದ್ದವು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು; ಅದರ ಅಗಲವು ಅಂಗಳದ ಮಿಕ್ಕ ಪರದೆಗಳಂತೆ ಐದು ಮೊಳ.19ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳಿಗೆ, ಕಟ್ಟುಗಳಿಗೆ ಹಾಗು ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳು ಬೆಳ್ಳಿಯವಾಗಿದ್ದವು.20ಗುಡಾರದ ಗೂಟಗಳೂ ಅಂಗಳದ ಗೂಟಗಳೂ ತಾಮ್ರದವುಗಳಾಗಿದ್ದವು.ಗುಡಾರವನ್ನು ನಿರ್ಮಿಸುವುದರಲ್ಲಿ ಉಪಯೋಗಿಸಿದ ಸಾಮಗ್ರಿಗಳು
21ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.22ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ ಮಾಡಿದನು.23ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು.24ದೇವಮಂದಿರದ ಸಕಲವಿಧವಾದ ಕೆಲಸಗಳಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್.25ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ದೇವರ ಸೇವೆಗೆಂದು ಸಂಗ್ರಹಿಸಿದ ಬೆಳ್ಳಿಯ ತೂಕವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ನೂರು ತಲಾಂತು ಹಾಗು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲ್.26ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು <<ಬೆಕಾ>> ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಆರು ಲಕ್ಷದ ಮೂರು ಸಾವಿರದ ಐನೂರ ಐವತ್ತು ಮಂದಿಯಾಗಿತ್ತು.27ದೇವಮಂದಿರದ ಗದ್ದಿಗೆಕಲ್ಲುಗಳನ್ನೂ ಪರದೆಯ ಕಂಬಗಳ ಮೆಟ್ಟುವಕಲ್ಲುಗಳನ್ನೂ ಎರಕಹೊಯ್ಯುವುದರಲ್ಲಿ ಒಂದೊಂದು ಗದ್ದಿಗೆಕಲ್ಲಿಗೆ ಒಂದೊಂದು ತಲಾಂತಿನ ಮೇರೆಗೆ ನೂರು ತಲಾಂತು ಬೆಳ್ಳಿಯು ಉಪಯೋಗಿಸಲಾಯಿತು.28ಮಿಕ್ಕ ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಕಂಬಗಳಿಗೆ ಕೊಂಡಿಗಳನ್ನೂ ಕಟ್ಟುಗಳನ್ನೂ ಮಾಡಿ ಅವುಗಳ ಅಗುಳಿಗಳಿಗೆ ತಗಡುಗಳನ್ನು ಹೊದಿಸಿದರು.29ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಲೆಕ್ಕವು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾನೂರು ಶೆಕೆಲ್ ಗಳಾಗಿತ್ತು.30ಅವುಗಳಿಂದ ದೇವದರ್ಶನದ ಗುಡಾರದ ಬಾಗಿಲಿನ ಮೆಟ್ಟುವಕಲ್ಲುಗಳನ್ನು, ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಯಜ್ಞವೇದಿಯ ಎಲ್ಲಾ ಉಪಕರಣಗಳನ್ನು,31ಅಂಗಳದ ಗದ್ದಿಗೆಕಲ್ಲುಗಳನ್ನು, ಅಂಗಳದ ಬಾಗಿಲಿನ ಮೆಟ್ಟುವ ಕಲ್ಲುಗಳನ್ನು ಹಾಗು ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು.
39ಯಾಜಕರಿಗೆ ದೀಕ್ಷಾವಸ್ತ್ರಗಳನ್ನು ಮಾಡಿದ್ದು
(ವಿಮೋ. 28:1-14)
1ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನೂ ಮಾಡಿದರು.2ಮಹಾಯಾಜಕನ ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಮಾಡಿದರು.3ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದೊಡನೆಯೂ ಹತ್ತಿಯ ಬಟ್ಟೆಯೊಡನೆಯೂ ಕಸೂತಿ ಕೆಲಸದವರ ಪದ್ಧತಿಯ ಮೇರೆಗೆ ಕಸೂತಿ ಕೆಲಸವನ್ನು ಮಾಡುವುದಕ್ಕಾಗಿ ಬಂಗಾರವನ್ನು ಬಡಿದು ಹಗುರವಾದ ತಗಡುಗಳನ್ನು ಮಾಡಿ ಸಣ್ಣ ಸಣ್ಣ ಎಳೆಗಳಾಗಿ ಕತ್ತರಿಸಿದರು.4ಏಫೋದ್ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು; ಅದರ ಎರಡು ಅಂಚುಗಳು ಜೋಡಿಸಲ್ಪಟ್ಟಿದ್ದವು.5ಕವಚದ ಮೇಲಿರುವ ಕಸೂತಿ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲು, ಚಿನ್ನದ ದಾರಗಳಿಂದಲು ಹಾಗೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಮಾಡಲ್ಪಟ್ಟಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.6ಮುದ್ರಾಕ್ಷವನ್ನು ಕೆತ್ತುವ ರೀತಿಯಲ್ಲಿ ಗೋಮೇಧಕರತ್ನಗಳಲ್ಲಿ ಇಸ್ರಾಯೇಲನ ಹನ್ನೆರಡು ಮಕ್ಕಳ ಹೆಸರುಗಳನ್ನು ಕೆತ್ತಿ ಆ ರತ್ನಗಳನ್ನು ಕುಂದಣದಲ್ಲಿ ಹಚ್ಚಿದರು.7ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ರತ್ನಗಳನ್ನು ಇಸ್ರಾಯೇಲರ ಜ್ಞಾಪಕಾರ್ಥವಾಗಿ ಅವುಗಳನ್ನು ಏಫೋದ್ ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದನು.ಏಫೋದ್ ಕವಚವನ್ನು ಮಾಡಿದ್ದು
(ವಿಮೋ. 38:1-7)
8ಏಫೋದ್ ಕವಚದಂತೆಯೇ ಕಸೂತಿಯಿಂದಲೂ ಕೆಲಸದಿಂದ ಚಿನ್ನದ ದಾರಗಳಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ನಯವಾದ ನಾರಿನ ಬಟ್ಟೆಯಲ್ಲಿ ಎದೆಯಪದಕವನ್ನು ಮಾಡಿದನು.9ಅದು ಚಚ್ಚೌಕವಾಗಿತ್ತು. ಆ ಎದೆಯಪದಕವು ಎರಡು ಪದರುಗಳ್ಳುಳದ್ದಾಗಿತ್ತು; ಅದು ಒಂದು ಗೇಣು ಉದ್ದವೂ ಒಂದು ಗೇಣು ಅಗಲವೂ ಆಗಿತ್ತು.10ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಇರಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು.11ಎರಡನೆಯ ಸಾಲಿನಲ್ಲಿ ಪಚ್ಚೆ, ನೀಲಮಣಿ ಮತ್ತು ವಜ್ರಗಳು.12ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಸುಗಂಧಿ ಮತ್ತು ಪದ್ಮರಾಗಗಳು.13ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ ಮತ್ತು ವೈಡೂರ್ಯಗಳು ಇದ್ದವು. ಈ ರತ್ನಗಳನ್ನು ಕುಂದಣಗಳಲ್ಲಿ ಇರಿಸಿದರು.14ಇಸ್ರಾಯೇಲರ ಕುಲಗಳ ಸಂಖ್ಯೆಯ ಪ್ರಕಾರ ಹನ್ನೆರಡು ರತ್ನಗಳಿದ್ದವು; ಮುದ್ರಾಕ್ಷಗಳಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರು ಕೆತ್ತಲ್ಪಟ್ಟಿತ್ತು.15ಎದೆಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ನೇಯ್ಗೆಯ ಕೆಲಸದಿಂದ ಮಾಡಿದರು.16ಎರಡು ಚಿನ್ನದ ಬಳೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಆ ಉಂಗುರಗಳನ್ನು ಎದೆಪದಕದ ಎರಡು ಮೂಲೆಗಳಿಗೆ ಜೋಡಿಸಿದರು.17ಹೆಣಿಗೇಕೆಲಸದ ಆ ಎರಡು ಚಿನ್ನದ ಸರಪಣಿಗಳನ್ನು ಪದಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಜೋಡಿಸಿದರು.18ಹೆಣಿಗೇಕೆಲಸದ ಆ ಸರಪಣಿಗಳ ಅಂಚುಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಬಳೆಗಳ ಮುಂಭಾಗಕ್ಕೆ ಜೋಡಿಸಿದರು.19ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಟ್ಟರು.20ಅವರು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಏಫೋದ್ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು.21ಎದೆಯಪದಕವು ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದರು.ಯಾಜಕರ ಇತರ ವಸ್ತ್ರಗಳ ತಯಾರಿಕೆ
(ವಿಮೋ. 28:31-43)
22ಬೆಚಲೇಲನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದಲೇ ನೇಕಾರನ ಕೆಲಸದಿಂದ ಮಾಡಿದನು.23ತಲೆತೂರಿಸುವುದಕ್ಕೆ ಅದರಲ್ಲಿ ಕೊರಳು ಪಟ್ಟಿಯನ್ನು ಮಾಡಿ ಅದು ಹರಿಯದಂತೆ ಅದರ ಸುತ್ತಲೂ ನೇಯ್ಗೆ ಕಸೂತಿಯನ್ನು ಹಾಕಿದನು.24ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನು ಮಾಡಿದರು.25ಮತ್ತು ಚೊಕ್ಕ ಬಂಗಾರದಿಂದ ಗೆಜ್ಜೆಗಳನ್ನು ಮಾಡಿ ನಿಲುವಂಗಿಯ ಅಂಚಿನಲ್ಲಿ ದಾಳಿಂಬೆ ಚೆಂಡುಗಳ ನಡುವೆ ಇಟ್ಟರು.26ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗಾಗಿ ಇರುವ ಆ ನಿಲುವಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.27ಅವರು ಆರೋನನಿಗೂ ಅವನ ಮಕ್ಕಳಿಗೂ ನಯವಾದ ನಾರಿನಿಂದ ನೇಕಾರರ ಕೆಲಸದ ರೀತಿಯಲ್ಲಿ ಮೇಲಂಗಿಗಳನ್ನೂ,28ನಯವಾದ ನಾರಿನಿಂದ ಮಹಾಯಾಜಕನ ಮುಂಡಾಸವನ್ನು, ಯಾಜಕರ ಅಲಂಕಾರವಾದ ಮುಂಡಾಸಗಳನ್ನು ಹಾಗೂ ಚಡ್ಡಿಗಳನ್ನು,29ಮತ್ತು ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.30ಅವರು ಚೊಕ್ಕ ಬಂಗಾರದಿಂದ ಪರಿಶುದ್ಧ ಕಿರೀಟಕ್ಕೆ ಬಾಸಿಂಗವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ, ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.31ಅದನ್ನು ಮುಂಡಾಸಕ್ಕೆ ಜೋಡಿಸುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.ಕೆಲಸದ ಮುಕ್ತಾಯ
(ವಿಮೋ. 35:10-19)
32ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಅದನ್ನು ಮಾಡಿದರು.33ಆಗ ಅವರು ಆ ದೇವದರ್ಶನ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು. ಗುಡಾರವನ್ನು, ಅದಕ್ಕೆ ಸಂಬಂಧಪಟ್ಟ ಉಪಕರಣಗಳೆಲ್ಲವನ್ನೂ ಅಂದರೆ ಅದರ ಕೊಂಡಿಗಳನ್ನು, ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು,34ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು, ಕಡಲಪ್ರಾಣಿಯ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು ಹಾಗೂ ಗರ್ಭಗುಡಿಯನ್ನು ಮರೆಮಾಡುವ ಪರದೆಯನ್ನು,35ಆಜ್ಞಾಶಾಸನಗಳ ಮಂಜೂಷವನ್ನು, ಅದರ ಕೋಲುಗಳನ್ನು, ಕೃಪಾಸನವನ್ನು,36ಮೇಜನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,37ಚೊಕ್ಕ ಬಂಗಾರದ ದೀಪಸ್ತಂಭವನ್ನು, ಅದರ ಮೇಲಿಡಬೇಕಾದ ಹಣತೆಗಳನ್ನು, ಅದರ ಉಪಕರಣಗಳನ್ನು, ದೀಪಕ್ಕೆ ಬೇಕಾದ ಎಣ್ಣೆಯನ್ನು,38ಚಿನ್ನದ ಧೂಪವೇದಿಯನ್ನು, ಅಭಿಷೇಕತೈಲವನ್ನು, ಸುವಾಸನೆಯುಳ್ಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,39ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಅದರ ಕೋಲುಗಳನ್ನು, ಉಪಕರಣಗಳನ್ನು,40ತೊಟ್ಟಿಯನ್ನು, ಅದರ ಪೀಠವನ್ನು, ಅಂಗಳದ ತೆರೆಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಯನ್ನು, ಅದರ ಹಗ್ಗಗಳನ್ನು, ಗೂಟಗಳನ್ನು, ದೇವದರ್ಶನದ ಗುಡಾರದ ಸೇವೆಗೆ ಬೇಕಾದ ಎಲ್ಲಾ ಉಪಕರಣಗಳನ್ನು,41ದೇವಮಂದಿರದೊಳಗೆ ನಡೆಯುವ ದೇವರಕಾರ್ಯಗಳಿಗೆ ಅಲಂಕಾರ ವಸ್ತ್ರ ಅಂದರೆ ಆರೋನನಿಗೆ ಬೇಕಾದ ಪವಿತ್ರ ವಸ್ತ್ರಗಳನ್ನು ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳನ್ನು ತಂದರು.42ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ಇಸ್ರಾಯೇಲರು ಆ ಕೆಲಸಗಳನ್ನೆಲ್ಲಾ ಮಾಡಿದ್ದರು.43ಅವರು ಮಾಡಿದ್ದ ಕೆಲಸವನ್ನು ಮೋಶೆಯು ಪರೀಕ್ಷಿಸಿ ನೋಡಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.
40ದೇವದರ್ಶನ ಗುಡಾರದ ಪ್ರತಿಷ್ಠೆ
1ಆಗ ಯೆಹೋವನು ಮೋಶೆಗೆ,2<<ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ದೇವದರ್ಶನದ ಗುಡಾರವನ್ನು ತೆರೆಯಬೇಕು.3ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು.4ಆ ಮೇಲೆ ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ಒಳಗೆ ತಂದು ಅದರ ಹಣತೆಗಳನ್ನು ಸರಿಯಾಗಿ ಇಡಬೇಕು.5ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಿಲಿನ ಪರದೆಯನ್ನು ಕಟ್ಟಬೇಕು.6ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇರಿಸಬೇಕು.7ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ದೊಡ್ಡ ತೊಟ್ಟಿಯೊಂದನ್ನು ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು.8ಅಂಗಳದ ಸುತ್ತಲಿನ ಆವರಣವನ್ನು ತೆರೆದು, ಅಂಗಳದ ಬಾಗಿಲಿಗೆ ಪರದೆಯನ್ನು ತೂಗಿಬಿಡಬೇಕು.9<<ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು.10ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಸರ್ವಾಂಗಹೋಮ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು.11ನೀನು ತಾಮ್ರದ ಬೋಗುಣಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.12<<ಅದಲ್ಲದೆ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ13ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಪವಿತ್ರವಾದ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು.14ಆ ನಂತರ ನೀನು ಅವನ ಮಕ್ಕಳನ್ನು ಬರಮಾಡಿ15ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು>> ಎಂದು ಹೇಳಿದನು.16ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.17ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮದಿನದಲ್ಲಿ ಮೋಶೆ ಗುಡಾರವನ್ನು ತೆರೆದನು.18ಮೋಶೆಯು ಗುಡಾರವನ್ನು ತೆರೆದು ಅದಕ್ಕೆ ಮೆಟ್ಟುವಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.19ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿ ಅದನ್ನು ಮರೆಮಾಡಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು.20ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.21ಮೋಶೆಯು ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ಪರದೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.22ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರ ಭಾಗದಲ್ಲಿ ತೆರೆಯ ಹೊರಗಡೆ ಮೇಜನ್ನು ಇರಿಸಿದನು.23ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ ಮೇಜಿನ ಮೇಲೆ ರೊಟ್ಟಿಗಳನ್ನು ಕ್ರಮವಾಗಿ ಯೆಹೋವನ ಸನ್ನಿಧಿಯಲ್ಲಿ ಇರಿಸಿದನು.24ಅವನು ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇರಿಸಿದನು.25ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ, ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.26ಮತ್ತು ಅವನು ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಎದುರಿಗೆ ಇರಿಸಿದನು.27ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು.28ಅವನು ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿದನು.29ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನೂ ಮಾಡಿದನು.30ಯೆಹೋವನು ಆಜ್ಞಾಪಿಸಿದಂತೆ ಮೋಶೆ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ತೊಳೆದುಕೊಳ್ಳುವುದಕ್ಕಾಗಿ ಅದರಲ್ಲಿ ನೀರು ತುಂಬಿಸಿದನು.31ಮೋಶೆಯು, ಆರೋನನು ಮತ್ತು ಅವನ ಮಕ್ಕಳೂ ಅದರಲ್ಲಿ ಕೈಕಾಲು ತೊಳೆದುಕೊಂಡರು.32ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ, ಯಜ್ಞವೇದಿಯ ಹತ್ತಿರ ಬರುವಾಗಲೂ ಯೆಹೋವನು ಆಜ್ಞಾಪಿಸಿದಂತೆ ಕೈಕಾಲುಗಳನ್ನು ತೊಳೆದುಕೊಳ್ಳುತ್ತಿದ್ದರು.33ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.ಯೆಹೋವನ ತೇಜಸ್ಸು
(ಅರಣ್ಯ. 9:15-23)
34ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.35ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.36ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲರು ಮುಂದೆ ಪ್ರಯಾಣ ಮಾಡುತ್ತಿದ್ದರು.37ಆ ಮೇಘವು ಮೇಲಕ್ಕೆ ಹೋಗದೇ ಇದ್ದು ಅದು ಹೊರಡುವ ತನಕ ಅವರು ಪ್ರಯಾಣ ಮಾಡದೆ ಇರುತ್ತಿದ್ದರು.38ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣುಗಳ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆಯೂ ಇರುತ್ತಿತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಇರುತ್ತಿತ್ತು.
ಯಾಜಕಕಾಂಡ
1ಸರ್ವಾಂಗಹೋಮ ವಿಧಾನ
1ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,2<<ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, <ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು.3<< <ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.4ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.5<< <ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.6ಅನಂತರ ಅವನು ಆ ಯಜ್ಞಪಶುವಿನ ಚರ್ಮವನ್ನು ಸುಲಿದು ಅದರ ದೇಹವನ್ನು ತುಂಡು ತುಂಡಾಗಿ ಕಡಿಯಬೇಕು.7ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು, ಅದರ ಮೇಲೆ ಕಟ್ಟಿಗೆಯನ್ನು ಕೂಡಿಸಿ ಇಡಬೇಕು.8ಆಮೇಲೆ ಯಾಜಕರು ಅಂದರೆ ಆರೋನನ ಮಕ್ಕಳು, ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಅದರ ಮೇಲೆ ಕ್ರಮವಾಗಿ ಇಡಬೇಕು.9ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.10<< <ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.11ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.12ಅವನು ಆ ಪಶುವಿನ ದೇಹವನ್ನು ತುಂಡು ತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.13ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.14<< <ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.15ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.16ಅದರ ಕರುಳುಗಳನ್ನು ಮತ್ತು ರೆಕ್ಕೆಗಳನ್ನು ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಿಕ್ಕಿನಲ್ಲಿರುವ ಬೂದಿಯ ಸ್ಥಳದಲ್ಲಿ ಹಾಕಬೇಕು.17ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
2ಧಾನ್ಯ ಸಮರ್ಪಣೆ
1<< <ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.2ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.3ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.4<< <ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.5ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.6ನೀವು ಅದನ್ನು ಚೂರುಚೂರಾಗಿ ಮುರಿದು, ಅದರ ಮೇಲೆ ಎಣ್ಣೆ ಹೊಯ್ಯಬೇಕು. ಇದು ಧಾನ್ಯನೈವೇದ್ಯವಾಗಿದೆ.7ನೀವು ಅರ್ಪಿಸುವ ಧಾನ್ಯ ನೈವೇದ್ಯ ಬಾಂಡ್ಲಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿಹಿಟ್ಟಿನದಾಗಿರಬೇಕು.8ನೀವು ಈ ಪದಾರ್ಥಗಳಿಂದ ಮಾಡಿದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವಾಗ ಅದನ್ನು ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು.9ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.10ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ.11<< <ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.12ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು.13ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವುದರಿಂದ ಅದು ಯಾವ ನೈವೇದ್ಯ ಪದಾರ್ಥವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪನ್ನು ಸೇರಿಸಲೇಬೇಕು.14<< <ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, ಉಮ್ಮಿಗೆಯನ್ನು ಸಮರ್ಪಿಸಬೇಕು.15ಅದು ಧಾನ್ಯನೈವೇದ್ಯ ವಸ್ತುವಾದ್ದರಿಂದ ನೀವು ಅದರ ಮೇಲೆ ಎಣ್ಣೆ ಹೊಯ್ದು ಧೂಪವಿಡಬೇಕು.16ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಉಮ್ಮಿಗೆಯಲ್ಲಿಯೂ ಮತ್ತು ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು.
3ಸಮಾಧಾನಯಜ್ಞ
1<< <ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.2ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.3ಆ ಯಜ್ಞಪಶುವಿನ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,4ಎರಡು ಮೂತ್ರಪಿಂಡಗಳ ಮೇಲೆ, ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಹತ್ತಿರ ಮೂತ್ರಪಿಂಡದ ತನಕ ಇರುವ ಕೊಬ್ಬನ್ನು ತೆಗೆದು ಅವುಗಳನ್ನು ಯೆಹೋವನಿಗೆ ಹೋಮಮಾಡಬೇಕು.5ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು.6<< <ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.7ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.8ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.9ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,10ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಮೇಲೆ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.11ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.12<< <ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.13ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.14ಅದರ ಅಂಗಾಂಶದ ಕೊಬ್ಬನ್ನು ಮತ್ತು ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,15ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.16ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.17ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ> >> ಅಂದನು.
4ತಿಳಿಯದೆ ತಪ್ಪುಮಾಡಿದವನ ದೋಷಪರಿಹಾರ
1ಯೆಹೋವನು ಮೋಶೆಗೆ ಇಂತೆಂದನು,2<<ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ <ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.3 ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.4ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ತಂದು, ಅದರ ತಲೆಯ ಮೇಲೆ ಕೈಯನ್ನಿಟ್ಟು, ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.5ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು.6ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.7ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.8ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು,9ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು.10ಅವನು ಅವುಗಳನ್ನು ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮದ ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.11ಆ ಹೋರಿಯಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು,12ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.ಇಸ್ರಾಯೇಲ್ ಸಮೂಹದ ದೋಷಪರಿಹಾರ
13<< <ಇಸ್ರಾಯೇಲರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,14ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಬೇಕು.15 ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.16ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನ ಗುಡಾರದೊಳಗೆ ತಂದು,17ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.18ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.19ಅವನು ಹೋರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು.20ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.21ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.ಮುಖ್ಯಾಧಿಕಾರಿಯ ದೋಷಪರಿಹಾರ
22<< <ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,23ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.24ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.25ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.26ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.ಸಾಮಾನ್ಯ ಜನರ ದೋಷಪರಿಹಾರ
27<< <ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,28ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.29ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.30ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.31ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.32<< <ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.33ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಕ್ಕಾಗಿ ವಧಿಸಬೇಕು.34ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.35ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
5ಅಶುದ್ಧತೆಗೆ ಕಾರಣವಾಗುವ ಸಂಗತಿಗಳು
1<< <ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.2ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಮತ್ತು ಜಂತು ಇವುಗಳ ಹೆಣವಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ, ದೇವರು ಅದನ್ನು ಅಶುದ್ಧ ಎಂದು ಪರಿಗಣಿಸುವುದರಿಂದ ಅವನಿಗೆ ತಿಳಿಯದೆ ಹೋದರೂ ಅವನು ಅಶುದ್ಧನೂ ಮತ್ತು ದೋಷಿಯೂ ಆಗಿರುವನು.3ಮನುಷ್ಯದೇಹದಿಂದ ಉಂಟಾದ ಯಾವುದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ಅದು ಅವನಿಗೆ ತಿಳಿದುಬಂದಾಗ ಅವನು ದೋಷಿಯಾಗುವನು.4ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.5ಅವನು ಈ ವಿಷಯಗಳಲ್ಲಿ ಯಾವುದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.6ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.7<< <ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.8ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಆದರೆ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು.9ಆಗ ಅವನು ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿಮುಕಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿಯಬೇಕು. ಅದು ದೋಷಪರಿಹಾರಕ ಯಜ್ಞ.10ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.11<< <ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.12ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೈವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕ ಯಜ್ಞ.13ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.> >>ಪ್ರಾಯಶ್ಚಿತ್ತ ಯಜ್ಞ
14ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,15<<ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.16ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.17<<ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.18ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು.19ಅವನು ಅಪರಾಧಿಯಾದುದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.>>
6ಇತರ ಪಾಪ ಅಪರಾಧಗಳಿಗೆ ಪ್ರಾಯಶ್ಚಿತ್ತ ಯಜ್ಞ
1ಯೆಹೋವನು ಮೋಶೆಗೆ,2<<ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ,3ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.4ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,5ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು.6ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು.7ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು>> ಎಂದು ಹೇಳಿದನು.ಸರ್ವಾಂಗಹೋಮ ವಿಷಯವಾದ ನಿಯಮಗಳು
8ಅನಂತರ ಯೆಹೋವನು ಮೋಶೆಗೆ,9<<ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, <ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.10ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರಿನ ಒಳಉಡುಪನ್ನು ಹಾಕಿಕೊಂಡು, ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ಯಜ್ಞವೇದಿಯ ಬಳಿಯಲ್ಲಿ ಇಡಬೇಕು.11ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.12ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ, ಬೆಂಕಿ ಉರಿಸಿ, ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ, ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.13ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.ಧಾನ್ಯನೈವೇದ್ಯ
14<< <ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.15ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.16ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.17ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.18ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು> >> ಎಂದು ಹೇಳಿದನು.19ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,20<<ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು.21ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.22ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.23ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು>> ಎಂದು ಹೇಳಿದನು.ದೋಷಪರಿಹಾರಕ ಯಜ್ಞದ ನಿಯಮಗಳು
24ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,25<<ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, <ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.26ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.27ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.28ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು.29ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು.30ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.
7ಪ್ರಾಯಶ್ಚಿತ್ತಯಜ್ಞದ ನಿಯಮಗಳು
1<< <ಪ್ರಾಯಶ್ಚಿತ್ತಯಜ್ಞದ ನಿಯಮಗಳು: ಆ ಯಜ್ಞವು ಮಹಾಪರಿಶುದ್ಧವಾದದ್ದು.2ಸರ್ವಾಂಗಹೋಮಪಶುವನ್ನು ವಧಿಸುವ ಸ್ಥಳದಲ್ಲೇ ಪ್ರಾಯಶ್ಚಿತ್ತಯಜ್ಞದ ಪಶುವನ್ನು ವಧಿಸಬೇಕು. ಯಾಜಕನು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.3ಅವನು ಅದರ ಕೊಬ್ಬನ್ನೆಲ್ಲಾ ಅಂದರೆ,4ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಮೇಲಿನಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.5ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅದು ಪ್ರಾಯಶ್ಚಿತ್ತ ಯಜ್ಞವಾಗಿದೆ.6ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.7ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ಮತ್ತು ದೋಷಪರಿಹಾರಕ ಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ನಿಯಮಯುಂಟು; ಹೇಗೆಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು.8ಯಾರಾದರೂ ಸರ್ವಾಂಗಹೋಮಕ್ಕಾಗಿ ಪಶುವನ್ನು ತಂದಾಗ ಅದರ ಚರ್ಮವು ಆ ಪಶುವನ್ನು ಸಮರ್ಪಿಸುವ ಯಾಜಕನದ್ದಾಗಿಯೇ ಇರಬೇಕು.9ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು.10ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ ಅಥವಾ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮಾನವಾಗಿ ಅನುಭವಿಸಬೇಕು.11<< <ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ.12ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.13ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.14ಸಮರ್ಪಿಸಿದ ಪ್ರತಿಯೊಂದು ವಿಧವಾದ ಯಜ್ಞದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಯಜ್ಞವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಅರ್ಪಿಸಬೇಕು.15ಕೃತಜ್ಞತೆಯ ಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು.16<< <ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.17ಮೂರನೆಯ ದಿನದ ವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.18ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.19ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ ಯಜ್ಞಪಶುವಿನ ಮಾಂಸವನ್ನು ತಿನ್ನಬಹುದು.20ಯಾವನಾದರೂ ಅಶುದ್ಧನಾಗಿದ್ದು, ಯೆಹೋವನಿಗೆ ಸಮರ್ಪಿತವಾದ ಸಮಾಧಾನ ಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು.21ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು> >> ಎಂದು ಹೇಳಿದನು.ಕೊಬ್ಬು ಮತ್ತು ರಕ್ತ ಭೋಜನವನ್ನು ನಿಷೇಧಿಸಿದ್ದು
22ಯೆಹೋವನು ಮೋಶೆಗೆ,23<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ನೀವು ಎತ್ತು, ಕುರಿ ಮತ್ತು ಆಡುಗಳ ಕೊಬ್ಬನ್ನು ತಿನ್ನಬಾರದು.24ಅಂತಹ ಪಶುವು ರೋಗದಿಂದ ಸತ್ತರೆ ಇಲ್ಲವೇ ಕಾಡುಮೃಗವು ಕೊಂದರೆ, ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು.25ಮನುಷ್ಯರು ಯೆಹೋವನಿಗೆ ಹೋಮಮಾಡುವಂತಹ ಪಶು ಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು.26ಪಕ್ಷಿಯದಾಗಲಿ ಅಥವಾ ಪಶುವಿನದಾಗಲಿ ಯಾವ ರಕ್ತವನ್ನು ನೀವು ಎಲ್ಲಿಯೂ ಊಟಮಾಡಬಾರದು.27ರಕ್ತಭೋಜನವನ್ನು ಮಾಡಿದವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು> >> ಎಂದು ಹೇಳಿದನು.ಯಾಜಕನ ಪಾಲು
28ಯೆಹೋವನು ಮೋಶೆಯೊಂದಿಗೆ ಮಾತನಾಡಿ,29<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ಸಮಾಧಾನಯಜ್ಞದ ಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಆ ಯಜ್ಞದ್ರವ್ಯಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು.30ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವುದಕ್ಕಾಗಿ ತಂದು ಸಮರ್ಪಿಸಬೇಕು.31ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಮತ್ತು ಅವನ ವಂಶದವರಿಗೂ ಸೇರಬೇಕು.32ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲತೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿ ಕೊಡಬೇಕು.33ಆರೋನನ ವಂಶದವರಲ್ಲಿ ಯಾವನು ಆ ಯಜ್ಞಪಶುವಿನ ರಕ್ತವನ್ನು ಮತ್ತು ಕೊಬ್ಬನ್ನು ಸಮರ್ಪಿಸುತ್ತಾನೋ ಅದರ ಬಲತೊಡೆಯು ಅವನ ಭಾಗವಾಗಿರಬೇಕು.34ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗು ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ> >> ಎಂದು ಹೇಳಿದನು.35ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.36ಇಸ್ರಾಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು ಮೋಶೆಯ ಮುಖಾಂತರ ಕೈಯಿಂದ ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ನೇಮಿಸಿದನು.37ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ ಮತ್ತು ಸಮಾಧಾನಯಜ್ಞ ಎಂಬ ಯಜ್ಞಗಳ ವಿಷಯದಲ್ಲಿ ಮೇಲೆ ಹೇಳಿದ ನಿಯಮಗಳನ್ನು ಅನುಸರಿಸಬೇಕು.38ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಎಲ್ಲಾ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರು ಅರ್ಪಿಸಬೇಕಾದ ಯಜ್ಞವನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ನಿಯಮಗಳನ್ನು ಕೊಟ್ಟನು.
8ಆರೋನನ ಹಾಗು ಅವನ ಮಕ್ಕಳ ಯಾಜಕಾಭಿಷೇಕ
1ಯೆಹೋವನು ಮೋಶೆಯೊಂದಿಗೆ ಮಾತನಾಡಿ,2<<ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,3ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕರೆದುಕೊಂಡು ಬಾ>> ಎಂದು ಹೇಳಿದನು.4ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.5ಆಗ ಮೋಶೆ ಅವರಿಗೆ, <<ನಾನು ಈಗ ಮಾಡುವ ಕಾರ್ಯವು ಯೆಹೋವನು ಆಜ್ಞಾಪಿಸಿದ್ದು>> ಎಂದು ಹೇಳಿದನು.6ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.7ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯ್ದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು.8ಅವನು ಎದೆಯ ಮೇಲೆ ಪದಕವನ್ನು ಬಿಗಿದು ಆರೋನನಿಗೆ ಹಾಕಿ ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಟ್ಟನು.9ಅವನ ತಲೆಗೆ ಪೇಟವನ್ನು ಇಟ್ಟು, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧವಾದ ಕಿರೀಟದಂತೆ ಇತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.10ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.11ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.12ಆರೋನನನ್ನು ಪ್ರತಿಷ್ಠಿಸುವುದಕ್ಕಾಗಿ ಆ ತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿದನು.13ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ತಲೆಗೆ ಪೇಟಗಳನ್ನು ಇಟ್ಟನು.ದೋಷಪರಿಹಾರಕ ಯಜ್ಞ
14ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.15ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.16ಆ ಹೋರಿಯ ಕರುಳುಗಳ ಮೇಲಣ ಕೊಬ್ಬನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಮೋಶೆ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಿದನು.17ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನು, ಮಾಂಸವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಡಿಸಿಬಿಟ್ಟನು.ಸರ್ವಾಂಗಹೋಮ ಸಮರ್ಪಣೆ
18ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.19ಅದನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.20ಆ ಟಗರನ್ನು ತುಂಡುತುಂಡಾಗಿ ಕಡಿದ ಮೇಲೆ ಮೋಶೆ ಅದರ ತಲೆಯನ್ನು, ಮಾಂಸಭಾಗಗಳನ್ನು ಮತ್ತು ಕೊಬ್ಬನ್ನು ಹೋಮಮಾಡಿದನು.21ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದು, ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮ ಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಸರ್ವಾಂಗಹೋಮವಾಗಿತ್ತು.ಪಟ್ಟಾಭಿಷೇಕ ಯಜ್ಞ
22ಆ ಮೇಲೆ ಅವನು ಯಾಜಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟರು.23ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.24ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.25ಅವನು ಆ ಟಗರಿನ ಕೊಬ್ಬನ್ನು ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಳಿಜದ ಹತ್ತಿರವಿರುವ ಕೊಬ್ಬು, ಎರಡು ಮೂತ್ರಪಿಂಡಗಳು, ಅವುಗಳ ಮೇಲಿದ್ದ ಕೊಬ್ಬನ್ನು ಮತ್ತು ಬಲತೊಡೆಯನ್ನು,26ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು.27ಅವನು ಅವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ನಿವಾಳಿಸಿದನು.28ಆ ಮೇಲೆ ಮೋಶೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಯಜ್ಞವೇದಿಯಲ್ಲಿ ಅದನ್ನು ಹೋಮಮಾಡಿದನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಪಟ್ಟಾಭಿಷೇಕ ಯಜ್ಞವಾಗಿತ್ತು.29ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು.30ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು.31ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, <<ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. <ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು> ಎಂಬುದೇ ನನಗಾದ ಅಪ್ಪಣೆ.32ಆ ಮಾಂಸದಲ್ಲಿಯೂ, ಭಕ್ಷ್ಯಗಳಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು.33ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವುದಕ್ಕೆ ಏಳು ದಿನಗಳು ಆಗುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.34ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.35ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ>> ಎಂದು ಹೇಳಿದನು.36ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಆರೋನನೂ ಮತ್ತು ಅವನ ಮಕ್ಕಳೂ ಅನುಸರಿಸಿ ನಡೆದರು.
9ಆರೋನನು ಪ್ರಥಮಯಜ್ಞವನ್ನು ಸಮರ್ಪಿಸಿದ್ದು
1ಎಂಟನೆಯ ದಿನದಲ್ಲಿ ಮೋಶೆ ಆರೋನನನ್ನು, ಅವನ ಮಕ್ಕಳನ್ನು ಮತ್ತು ಇಸ್ರಾಯೇಲರ ಹಿರಿಯರನ್ನು ಕರೆದನು.2ಅವನು ಆರೋನನಿಗೆ, <<ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.3ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, <ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನೆ, ಆದುದರಿಂದ ನೀವು ಆತನ ಸನ್ನಿಧಿಯಲ್ಲಿ ದೋಷಪರಿಹಾರಕ್ಕಾಗಿ ಸಮರ್ಪಿಸಲು ಒಂದು ಹೋತವನ್ನು, ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಪೂರ್ಣಾಂಗವಾದ ಕರುವನ್ನು,4ಕುರಿಯನ್ನು ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನು, ಟಗರನ್ನು ಧಾನ್ಯನೈವೇದ್ಯಕ್ಕಾಗಿ ಎಣ್ಣೆಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಯೆಹೋವನ ಮುಂದೆ ಬರಬೇಕೆಂದು ಆಜ್ಞಾಪಿಸು> >> ಅಂದನು.5ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ಅವುಗಳನ್ನೆಲ್ಲಾ ದೇವದರ್ಶನ ಗುಡಾರದ ಹತ್ತಿರಕ್ಕೆ ತಂದರು. ಸರ್ವಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತರು.6ಆಗ ಮೋಶೆ ಅವರಿಗೆ, <<ನೀವು ಏನು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು>> ಎಂದು ಹೇಳಿದನು.7ಆಗ ಮೋಶೆ ಆರೋನನಿಗೆ, <<ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಸಮರ್ಪಿಸಿ ನಿನಗೋಸ್ಕರವೂ ಮತ್ತು ನಿನ್ನ ಜನರಿಗೋಸ್ಕರವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗಾಗಿ ದೋಷಪರಿಹಾರವನ್ನು ಮಾಡು>> ಎಂದು ಹೇಳಿದನು.8ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕ ಯಜ್ಞದ ಹೋರಿಯನ್ನು ವಧಿಸಿದನು.9ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯ್ದುಬಿಟ್ಟನು.10ಆ ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು.11ಅದರ ಮಾಂಸವನ್ನು ಮತ್ತು ಚರ್ಮವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.12ತರುವಾಯ ಸರ್ವಾಂಗಹೋಮ ಪಶುವನ್ನು ವಧಿಸಿದನು. ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ತಂದು ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.13ಅವರು ಆ ಪಶುವಿನ ಮಾಂಸಭಾಗಗಳನ್ನು ಮತ್ತು ತಲೆಯನ್ನು ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.14ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ತೊಳೆದು ಯಜ್ಞವೇದಿಯಲ್ಲಿ ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಹೋಮಮಾಡಿದನು.15ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಅದನ್ನು ಸಮರ್ಪಿಸಿದನು.16ಸರ್ವಾಂಗಹೋಮ ಪಶುವನ್ನು ಯಥಾವಿಧಿಯಾಗಿ ಸಮರ್ಪಿಸಿದನು.17ಅವರು ತಂದ ಧಾನ್ಯನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು, ಹೊತ್ತಾರೆಯ ಸರ್ವಾಂಗಹೋಮದ ಸಂಗಡ ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.18ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನು ಮತ್ತು ಟಗರನ್ನು ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.19ಅವರು ಹೋರಿಯ ಕೊಬ್ಬನ್ನು, ಟಗರಿನ ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು,20ಎದೆಯ ಭಾಗಗಳ ಮೇಲೆ ಇಟ್ಟು ಒಪ್ಪಿಸಲಾಗಿ ಅವನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.21ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.22ಆರೋನನು ಆ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.23ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.24ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.
10ನಾದಾಬ್ ಹಾಗೂ ಅಬೀಹೂರ ಮರಣ
1ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.2ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.3ಆಗ ಮೋಶೆ ಆರೋನನಿಗೆ, <<ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ,<ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು,
ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ> >> ಎಂದು ಹೇಳಿದನು.
ಅದಕ್ಕೆ ಆರೋನನು ಮೌನವಾಗಿದ್ದನು.
4ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, <<ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು>> ಅಂದನು.5ಮೋಶೆಯ ಅಪ್ಪಣೆಯ ಮೇರೆಗೆ ಅವರು ಸಮೀಪಕ್ಕೆ ಬಂದು ಸತ್ತವರು ತೊಟ್ಟುಕೊಂಡಿದ್ದ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಎತ್ತಿ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋದರು.6ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, <<ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.7ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ>> ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.ಯಾಜಕರಿಗೆ ನಿಷಿದ್ಧವಾದ ಕಾರ್ಯಗಳು
8ಯೆಹೋವನು ಆರೋನನೊಂದಿಗೆ ಮಾತನಾಡಿ,9<<ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.10ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು, ಶುದ್ಧವಾದವುಗಳನ್ನು, ಅಶುದ್ಧವಾದವುಗಳನ್ನು ವಿವೇಚಿಸುವುದೂ,11ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವುದೂ ನಿಮ್ಮ ಕರ್ತವ್ಯವಾಗಿದೆ>> ಎಂದು ಹೇಳಿದನು.12ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, <<ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.13ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳಲ್ಲಿ ಅದು ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ.14ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನು, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನು ಯಾವುದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ, ನಿನ್ನ ಗಂಡುಮಕ್ಕಳೂ ಹಾಗು ಹೆಣ್ಣುಮಕ್ಕಳೂ ಅದನ್ನು ತಿನ್ನಬಹುದು. ಏಕೆಂದರೆ ಇಸ್ರಾಯೇಲರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.15ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನು ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನು ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ಮತ್ತು ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ>> ಎಂದು ಹೇಳಿದನು.16ಜನರೆಲ್ಲರಿಗೋಸ್ಕರ ದೋಷಪರಿಹಾರ ಮಾಡಲು ಸಮರ್ಪಿತವಾದ ಹೋತದ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು,17<<ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?18ಅದರ ರಕ್ತವು ಪವಿತ್ರಸ್ಥಾನದೊಳಗೆ ತರಬಾರದಾಗಿತ್ತು, ನಾನು ಆಜ್ಞಾಪಿಸಿದಂತೆ ನೀವು ದೇವಸ್ಥಾನದ ಪ್ರಾಕಾರದೊಳಗೆ ಅದನ್ನು ತಿನ್ನಬೇಕಾಗಿತ್ತು>> ಅಂದನು.19ಅದಕ್ಕೆ ಆರೋನನು ಮೋಶೆಗೆ, <<ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಯಜ್ಞವನ್ನು ಮತ್ತು ಸರ್ವಾಂಗಹೋಮವನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋರುತ್ತಿತ್ತೋ?>>20ಎಂದು ಉತ್ತರಕೊಡಲಾಗಿ ಮೋಶೆ ಆ ಮಾತನ್ನು ಕೇಳಿ ತೃಪ್ತಿಗೊಂಡನು.
11ಶುದ್ಧ ಮತ್ತು ಅಶುದ್ಧವಾದ ಪ್ರಾಣಿಗಳು
1ಯೆಹೋವನು ಮೋಶೆ ಆರೋನರ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,2<<ನೀವು ಇಸ್ರಾಯೇಲರಿಗೆ ಹೀಗೆ ಹೇಳಬೇಕು, <ಭೂಮಿಯ ಮೇಲಿರುವ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು,3ಅವು ಯಾವುವೆಂದರೆ ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.4ಆದರೆ ಯಾವ ಪ್ರಾಣಿಯು ಮೆಲಕು ಹಾಕಿದರೂ ಗೊರಸು ಸೀಳಲಿರುವುದಿಲ್ಲವೋ ಮತ್ತು ಯಾವ ಪ್ರಾಣಿಯು ಗೊರಸು ಸೀಳಿದರೂ ಮೆಲಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆಯು ಮೆಲಕುಹಾಕುವಂಥದು ಸರಿ; ಆದರೂ ಅದಕ್ಕೆ ಸೀಳುಗೊರಸು ಇಲ್ಲವಾದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದೆಣಿಸಬೇಕು.5ಬೆಟ್ಟದ ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದುದರಿಂದ ಅದು ನಿಮಗೆ ಅಶುದ್ಧ.6ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದೂ ನಿಮಗೆ ಅಶುದ್ಧ.7ಹಂದಿಯ ಗೊರಸು ಸೀಳಿದೆ; ಆದರೂ ಅದು ಮೆಲಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ.8ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು; ಇವುಗಳನ್ನು ಅಶುದ್ಧವೆಂದೆಣಿಸಬೇಕು.ಶುದ್ಧ ಮತ್ತು ಅಶುದ್ಧವಾದ ಜಲಜಂತುಗಳು
9<< <ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.10ಆದರೆ ಸಮುದ್ರದಲ್ಲಿದ್ದರೂ ಅಥವಾ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.11ಅಂತಹವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಅಸಹ್ಯವಾಗಿರಬೇಕು.12ಜಲಜಂತುಗಳಲ್ಲಿ ಯಾವುದಕ್ಕೆ ರೆಕ್ಕೆಗಳೂ, ಪರೆಪರೆಯಾದ ಮೈ ಇಲ್ಲವೋ ಅವು ನಿಮಗೆ ಅಸಹ್ಯವಾಗಿರಬೇಕು.ಶುದ್ಧ ಮತ್ತು ಅಶುದ್ಧವಾದ ಪಕ್ಷಿಗಳು
13<< <ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು,14ಕ್ರೌಂಚ, ಹದ್ದು,15ಸಕಲವಿಧವಾದ ಗಿಡುಗ,16ಸಕಲವಿಧವಾದ ಕಾಗೆ, ಉಷ್ಟ್ರಪಕ್ಷಿ, ಉಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ,17ಗೂಬೆ, ಹೆಗ್ಗೂಬೆ, ನೀರುಕಾಗೆ,18ಬಿಳಿಗೂಬೆ, ಕರೇಟು, ಕಣಜ ಗೂಬೆ, ರಣಹದ್ದು, ಕಡಲ ಡೇಗೆ,19ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ. ಇವುಗಳ ಮಾಂಸವನ್ನು ತಿನ್ನಬಾರದು.ನಿಷಿದ್ಧವಾದ ಕ್ರಿಮಿಕೀಟಗಳು
20<< <ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ನಿಷಿದ್ಧವಾಗಿರಬೇಕು.21ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು.22ಸಕಲವಿಧವಾದ ಮಿಡತೆಗಳನ್ನು, ಬೋಳುಮಿಡತೆಗಳನ್ನು, ಜಿಟ್ಟಿಮಿಡತೆಗಳನ್ನು ಮತ್ತು ಸಣ್ಣಮಿಡತೆ ಇವುಗಳನ್ನೆಲ್ಲಾ ತಿನ್ನಬಹುದು.23ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವಾಗಿವೆ.ಅಪವಿತ್ರತೆಯನ್ನು ಉಂಟುಮಾಡುವ ಪ್ರಾಣಿಗಳು
24<< <ಅದಲ್ಲದೆ ಮುಂದೆ ಹೇಳಿರುವ ಪ್ರಾಣಿಗಳಿಂದ ನಿಮಗೆ ಅಪವಿತ್ರತೆ ಉಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.25ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.26ಅವು ಯಾವುವೆಂದರೆ, ಯಾವ ಪಶುವಿನ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲಕುಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಯಾರನ್ನು ಅವು ಸೋಂಕುವವೋ ಅವನು ಅಶುದ್ಧನಾಗುವನು.27ಚತುಷ್ಪಾದ [ನಾಲ್ಕುಕಾಳುಗಳ] ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವ ಎಲ್ಲವುಗಳು ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣವನ್ನು ಯಾರು ಮುಟ್ಟುವರೋ ಅವರು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವರು.28ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.ಅಶುದ್ಧವಾದ ಜಂತುಗಳು
29<< <ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ,30ಹಾವರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ.31ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವನ್ನು ಮುಟ್ಟುವವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.32ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತುವು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ, ಚರ್ಮವಾಗಲಿ ಅಥವಾ ಗೋಣಿಯಾಗಲಿ ಅದು ಎಂಥದಾದರೂ, ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಆ ಸಾಯಂಕಾಲದ ವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.33ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.34ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದರೆ ಅಶುದ್ಧವಾಗುವುದು. ಪಾನ ದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು.35ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಅಥವಾ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.36ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು.37ಬಿತ್ತಬೇಕಾದ ಬೀಜದ ಮೇಲೆ ಈ ಜಂತುಗಳ ಹೆಣ ಬಿದ್ದರೆ ಆ ಬೀಜವು ಅಶುದ್ಧವಾಗುವುದಿಲ್ಲ.38ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ.39<< <ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.40ಆ ಹೆಣದಲ್ಲಿ ಸ್ವಲ್ಪವಾಗಿ ತಿಂದರೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.ತಿನ್ನಬಾರದ ಕ್ರಿಮಿಕೀಟಗಳು
41<< <ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಅಸಹ್ಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.42ಹೊಟ್ಟೆಯಿಂದ ಹರಿದು ಹೋಗುವುದನ್ನು, ಕಾಲಿನಿಂದ ಹರಿದಾಡುವಂಥದನ್ನು, ಬಹಳ ಕಾಲುಳ್ಳದ್ದನ್ನು ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನು ನೀವು ತಿನ್ನಬಾರದು; ಅವು ಅಸಹ್ಯವಾಗಿವೆ.43ನೀವು ಅಂತಹ ಯಾವ ಸಣ್ಣ ಜೀವಿಯನ್ನು ತಿಂದು ನಿಮ್ಮನ್ನು ನೀವೇ ಹೇಸಿಗೆಮಾಡಿಕೊಂಡು ಅಶುದ್ಧರಾಗಬಾರದು.44ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.45ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.46<< <ಇದೇ ಪಶು, ಪಕ್ಷಿ, ಜಲಚರ ಮತ್ತು ಕ್ರಿಮಿಕೀಟಗಳ ವಿಷಯವಾದ ನಿಯಮ.47ಇದರಿಂದ ಶುದ್ಧ ಹಾಗು ಅಶುದ್ಧಗಳನ್ನು, ತಿನ್ನಬಹುದಾದ ಜೀವಿಗಳು ಮತ್ತು ತಿನ್ನಬಾರದಾದ ಜೀವಿಗಳ ಕುರಿತು ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು.> >>
12ಬಾಣಂತಿಯರ ಶುದ್ಧೀಕರಣ
1ಯೆಹೋವನು ಮೋಶೆಗೆ,2<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ಒಬ್ಬ ಸ್ತ್ರೀ ಗಂಡುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.3ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು.4ಆ ಮೇಲೆ ಅವಳ ಶುದ್ಧೀಕರಣ ಪೂರ್ಣಗೊಳ್ಳಲು ಇನ್ನು ಮೂವತ್ತಮೂರು ದಿನ ಆಗುವುದು. ಅದು ಪೂರ್ಣಗೊಳ್ಳುವ ತನಕ ಅವಳು ದೇವರ ಪವಿತ್ರ ವಸ್ತುವನ್ನು ಮುಟ್ಟಬಾರದು ಅಥವಾ ದೇವಸ್ಥಾನಕ್ಕೆ ಬರಬಾರದು.5ಹೆಣ್ಣುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು ಮತ್ತು ಶುದ್ಧೀಕರಣ ಪೂರ್ಣಗೊಳ್ಳಲು ಅರುವತ್ತಾರು ದಿನಗಳು ಆಗುವುದು.6<< <ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.7ಅವನು ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವಳಿಗೆ ರಕ್ತಸ್ರಾವದಿಂದುಂಟಾದ ಅಶುದ್ಧತೆಯಿಂದ ಶುದ್ಧಳಾಗುವಳು. ಗಂಡುಮಗುವಿಗಾಗಲಿ ಅಥವಾ ಹೆಣ್ಣು ಮಗುವಿಗಾಗಲಿ ಜನ್ಮ ನೀಡಿದವಳಿಗೆ ಇದೇ ನಿಯಮ.8ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು> >> ಎಂಬುದೆ.
13ಕುಷ್ಠರೋಗದಿಂದ ಉಂಟಾಗುವ ಅಪವಿತ್ರತೆ
1ಯೆಹೋವನು ಮೋಶೆ ಮತ್ತು ಆರೋನರಿಗೆ,2<<ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ, ಗುಳ್ಳೆಯಾಗಲಿ ಅಥವಾ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.3ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸುವಾಗ ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿದ್ದರೆ ಮತ್ತು ಆ ಮಚ್ಚೆ ಉಳಿದ ಚರ್ಮಕ್ಕಿಂತ ಆಳವಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.4ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಉಳಿದ ಚರ್ಮಕ್ಕಿಂತ ಆಳವಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗದಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇರಿಸಬೇಕು.5ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ಕಾಣಿಸಿದರೆ ಯಾಜಕನು ಇನ್ನು ಏಳು ದಿನಗಳ ವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು.6ಆ ಏಳು ದಿನಗಳಾದ ಮೇಲೆ ಯಾಜಕನು ಪುನಃ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.7ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು.8ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.9<<ಕುಷ್ಠರೋಗದ ಲಕ್ಷಣಗಳು ಯಾವನಲ್ಲಾದರೂ ಕಾಣಿಸಿದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.10ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.11ಅವನು ಅಶುದ್ಧನಾದುದರಿಂದ ಯಾಜಕನು ಅವನನ್ನು ಪ್ರತ್ಯೇಕಿಸದೆ ಅಶುದ್ಧನೆಂದು ನಿರ್ಣಯಿಸಬೇಕು.12<<ಆದರೆ ಒಬ್ಬನ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ,13ಯಾಜಕನು ಪರೀಕ್ಷಿಸುವಾಗ ಆ ತೊನ್ನು ದೇಹದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರೆ, ಅಂಥವನನ್ನು ಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅವನ ಚರ್ಮವೆಲ್ಲಾ ಬೆಳ್ಳಗಾಗಿ ಹೋದುದರಿಂದ ಅವನು ಶುದ್ಧನು.14ಆದರೆ ಅಂಥವನ ದೇಹದಲ್ಲಿ ಎಲ್ಲಿಯಾದರೂ ಮಾಂಸ ಕಂಡುಬಂದರೆ ಅವನು ಅಶುದ್ಧನಾಗುವನು.15ಯಾಜಕನು ಆ ಮಾಂಸವನ್ನು ನೋಡಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಂತಹ ಮಾಂಸವು ಅಶುದ್ಧವೇ; ಅದು ಕುಷ್ಠವೇ.16ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ಪುನಃ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.17ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಬೆಳ್ಳಗಾಗಿಹೋಗಿದ್ದರೆ ಆ ಮನುಷ್ಯನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ಶುದ್ಧನೇ.18<<ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು ಅದು ವಾಸಿಯಾದ ಮೇಲೆ,19ಅದು ಇದ್ದ ಸ್ಥಳದಲ್ಲಿ ಬಿಳಿ ಬಾವಾಗಲಿ ಅಥವಾ ಕೆಂಪು ಬಿಳುಪು ಮಿಶ್ರವಾಗಿ ಹೊಳೆಯುವ ಕಲೆಯಾಗಲಿ ಉಂಟಾದರೆ ಅವನು ತನ್ನನ್ನು ಯಾಜಕನಿಗೆ ತೋರಿಸಿಕೊಳ್ಳಬೇಕು.20ಯಾಜಕನು ಪರೀಕ್ಷಿಸುವಾಗ ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.21ಆದರೆ ಯಾಜಕನು ಪರೀಕ್ಷಿಸುವಾಗ ಅದರಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿರದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.22ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ.23ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.24<<ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದುಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿ ಇದ್ದರೆ ಯಾಜಕನು ಅದನ್ನು ನೋಡಬೇಕು.25ಅವನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಕಲೆಯು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.26ಆದರೆ ಯಾಜಕನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆ, ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.27ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠರೋಗವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.28ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬೆಂಕಿಯಿಂದ ಸುಟ್ಟ ಕಲೆಯೇ ಹೊರತು ಮತ್ತೇನೂ ಅಲ್ಲ.29<<ಹೆಂಗಸಿನ ತಲೆಯಲ್ಲಿ ಆಗಲಿ, ಗಂಡಸಿನ ತಲೆಯಲ್ಲಿ ಆಗಲಿ ಅಥವಾ ಗಡ್ಡದ ಮೇಲೆ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಬೇಕು.30ಆಗ ಅದು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಅಥವಾ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ಲಕ್ಷಣವಿದ್ದರೆ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು.31ಯಾಜಕನು ಆ ಗಾಯವನ್ನು ನೋಡುವಾಗ ಅದು ಬೇರೆ ಚರ್ಮಕ್ಕಿಂತ ಆಳವಾಗಿ ಕಾಣದೆ ಹೋದಾಗ್ಯೂ, ಅದು ಇರುವ ಭಾಗದಲ್ಲಿ ಕಪ್ಪು ಕೂದಲು ಇಲ್ಲದಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.32ಏಳನೆಯ ದಿನದಲ್ಲಿ ಯಾಜಕನು ಪರೀಕ್ಷಿಸುವಾಗ ಆ ಗಾಯ ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಭಾಗದಲ್ಲಿ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆಹೋದರೆ,33ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಗಾಯ ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.34ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಗಾಯವನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಉಳಿದ ಚರ್ಮಕ್ಕಿಂತ ಆಳವಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು.35ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ಗಾಯ ಚರ್ಮದಲ್ಲಿ ಹರಡಿಕೊಂಡರೆ,36ಯಾಜಕನು ಅವನನ್ನು ಪರೀಕ್ಷಿಸಬೇಕು; ಆದರೆ ಹಳದಿಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ; ಅವನು ಅಶುದ್ಧನೇ.37ಆ ಗಾಯ ಮೊದಲು ಇದ್ದಂತೆಯೇ ಇದ್ದು ಅದರಲ್ಲಿ ಕಪ್ಪು ಕೂದಲು ಹುಟ್ಟಿದ್ದರೆ ಅದು ವಾಸಿಯಾಯಿತು. ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.38<<ಪುರುಷನಿಗಾಗಲಿ ಅಥವಾ ಸ್ತ್ರೀಗಾಗಲಿ ಚರ್ಮದಲ್ಲಿ ಹೊಳೆಯುವ ಬಿಳುಪಾದ ಕಲೆಗಳು ಅಲ್ಲಲ್ಲಿ ಹುಟ್ಟಿದ್ದರೆ ಯಾಜಕನು ಅವುಗಳನ್ನು ಪರೀಕ್ಷಿಸಬೇಕು.39ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು.40<<ಯಾವನ ತಲೆಯ ಕೂದಲು ಉದುರಿ ಹೋಗಿ ಅವನು ಬೋಳುತಲೆಯವನಾದರೂ ಅವನು ಶುದ್ಧನೇ.41ಮುಂದಲೆಯ ಕೂದಲು ಉದುರಿದರೆ ಅವನು ಪಟ್ಟೆತಲೆಯವನಾದರೂ ಶುದ್ಧನೇ.42ಆದರೆ ಬೋಳುತಲೆಯಲ್ಲಾಗಲಿ ಅಥವಾ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪು ಮಿಶ್ರವಾದ ಮಚ್ಚೆ ಹುಟ್ಟಿದರೆ ಅದು ಕುಷ್ಠವೇ.43ಯಾಜಕನು ಅವನನ್ನು ಪರೀಕ್ಷಿಸಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ,44ಅವನು ಕುಷ್ಠರೋಗಿ ಮತ್ತು ಅಶುದ್ಧನು. ಅವನ ತಲೆಯ ಮೇಲೆ ಕುಷ್ಠದ ಗುರುತು ಕಾಣಿಸಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.45<<ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು <ನಾನು ಅಶುದ್ಧನು, ಅಶುದ್ಧನು> ಎಂದು ಕೂಗಿಕೊಳ್ಳಬೇಕು.46ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.ಕುಷ್ಠ ಸೋಂಕಿದ ಬಟ್ಟೆಬರೆ
47<<ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡು ಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ಅಥವಾ ನಾರಿನ ಬಟ್ಟೆಯಾಗಲಿ,48ನಾರಿನ ಅಥವಾ ಉಣ್ಣೆಯ ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಇಲ್ಲವೆ ತೊಗಲಿನಲ್ಲಾಗಲಿ, ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ,49ಆ ಬಟ್ಟೆ, ತೊಗಲು, ಹಾಸು, ಹೆಣಿಗೆ, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು.50ಯಾಜಕನು ಅದನ್ನು ಪರೀಕ್ಷಿಸಿ ನೋಡಿ ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇಡಿಸಬೇಕು.51ಏಳನೆಯ ದಿನದಲ್ಲಿ ಅವನು ಅದನ್ನು ಪರೀಕ್ಷಿಸುವಾಗ ಆ ಬಟ್ಟೆಯ ಹಾಸಿನಲ್ಲಾಗಲಿ ಅಥವಾ ಹೆಣಿಗೆಯಲ್ಲಾಗಲಿ ಇಲ್ಲವೆ ಯಾವುದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ, ಆ ವಸ್ತುವು ಅಶುದ್ಧ.52ಆ ವಸ್ತುವು ಬಟ್ಟೆಯಾದರೂ, ಹಾಸಾದರೂ, ಹೊಕ್ಕಾದರೂ, ಉಣ್ಣೆಯದಾದರೂ, ನಾರಿನದಾದರೂ ಅಥವಾ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವುದರಿಂದ ಅದನ್ನು ಬೆಂಕಿಯಿಂದ ಸುಡಿಸಿಬಿಡಬೇಕು.53ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ,54ಅದನ್ನು ನೀರಿನಿಂದ ತೊಳೆಯಬೇಕೆಂದು ಯಾಜಕನು ಅಪ್ಪಣೆಕೊಟ್ಟು ಇನ್ನು ಏಳು ದಿನಗಳ ತನಕ ಅದನ್ನು ಪ್ರತ್ಯೇಕವಾಗಿ ಇಡಿಸಬೇಕು.55ಆ ಮಚ್ಚೆ ಇದ್ದ ವಸ್ತುಗಳನ್ನು ತೊಳೆಸಿದ ಮೇಲೆ ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲ್ಭಾಗದಿಂದಾಗಲಿ ಅಥವಾ ಕೆಳಭಾಗದಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.56ಆದರೆ ತೊಳೆದ ಬಟ್ಟೆಯನ್ನು ಯಾಜಕನು ಪರೀಕ್ಷಿಸುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಾಗಿಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಆ ಬಟ್ಟೆಯಿಂದಾಗಲಿ, ತೊಗಲಿನಿಂದಾಗಲಿ, ಹಾಸಿನಿಂದಾಗಲಿ, ಹೆಣಿಗೆಯಿಂದಾಗಲಿ ಕತ್ತರಿಸಬೇಕು.57ಆ ಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನು ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.58ಆ ಬಟ್ಟೆಯನ್ನಾಗಲಿ, ಹಾಸನ್ನಾಗಲಿ, ಹೆಣಿಗೆಯನ್ನಾಗಲಿ ಅಥವಾ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಆ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು.59<<ಉಣ್ಣೇ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದ ಕುಷ್ಠರೋಗದ ಗುರುತಿನ ವಿಷಯವಾದ ನಿಯಮ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಥವಾ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು>> ಎಂದು ಹೇಳಿದನು.
14ಚರ್ಮರೋಗದ ಕುಷ್ಠರೋಗದ ಶುದ್ಧೀಕರಣ
1ಯೆಹೋವನು ಮೋಶೆಯೊಂದಿಗೆ ಮಾತನಾಡಿ,2<<ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.3ಯಾಜಕನು ಪಾಳೆಯದ ಹೊರಗೆ ಹೋಗಿ ಅವನಲ್ಲಿರುವ ಕುಷ್ಠವು ವಾಸಿಯಾಗಿದೆಯೋ ಎಂದು ಪರೀಕ್ಷಿಸಬೇಕು.4ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.5ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಬೇಕು.6<<ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.7ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.8ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.9ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.10<<ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.11ಶುದ್ಧಿ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.12ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.13ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.14ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.15ಆಗ ಯಾಜಕನು ಆ ಒಂದು ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,16ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.17ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.18ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.19<<ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು.20ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.21<<ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.22ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.23ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.24ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನು, ಒಂದು ಸೇರು ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.25ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.26ಅನಂತರ ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,27ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿಮುಕಿಸಬೇಕು.28ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.29ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.30ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳನ್ನಾಗಲಿ31ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯನೈವೇದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.32<<ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ>> ಎಂದು ಹೇಳಿದನು.ಕುಷ್ಠ ಹತ್ತಿದ ಮನೆ
33ಯೆಹೋವನು ಮೋಶೆ ಮತ್ತು ಆರೋನರಿಗೆ,34<<ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,35ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, <ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ> ಎಂದು ಅವನಿಗೆ ತಿಳಿಸಬೇಕು.36ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮೊದಲು ಆ ಮನೆಯನ್ನು ಬರಿದುಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುತ್ತದೆ. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವುದಕ್ಕೆ ಒಳಗೆ ಹೋಗಬೇಕು.37ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ,38ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.39ಏಳನೆಯ ದಿನದಲ್ಲಿ ಯಾಜಕನು ಬಂದು ಪರೀಕ್ಷಿಸಿ ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ,40ಆ ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.41ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.42ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.43<<ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.44ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.45ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.46ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.47ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.48<<ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.49ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು.50ಅವನು ಒಂದು ಪಕ್ಷಿಯನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು,51ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.52ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಅವನು ಶುದ್ಧಿಮಾಡುವನು.53ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು.54<<ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ,55ಕೂದಲು ಬೆಳೆಯದ ಗಾಯ, ಬಟ್ಟೆಯಲ್ಲಿ ಅಥವಾ ಮನೆಯ ಗೋಡೆಯಲ್ಲಿ ಕಾಣಿಸುವ ಕುಷ್ಠ ರೋಗದ ಗುರುತು,56ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ57ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ>> ಎಂದು ಹೇಳಿದನು.
15ಜನನೇಂದ್ರಿಯದ ಸ್ರಾವದಿಂದುಂಟಾಗುವ ಅಶುದ್ಧತೆ
1ಯೆಹೋವನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ,2<<ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, <ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು.3ಆ ಸ್ರಾವವು ಹರಿಯುತ್ತಿದ್ದರು ಅಥವಾ ನಿಂತುಹೋಗಿದ್ದರು ಆ ದೇಹಸ್ಥಿತಿಯಿಂದ ಅವನು ಅಶುದ್ಧನು.4ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಮತ್ತು ಕುಳಿತಿರುವ ಪ್ರತಿಯೊಂದು ಆಸನವೂ ಅಶುದ್ಧವು.5ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.6ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.7ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.8ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.9ಸ್ರಾವವುಳ್ಳವನು ಕುಳಿತ್ತಿದ್ದ ತಡಿಯು ಅಶುದ್ಧವು.10ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.11ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.12ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.13<< <ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.14ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.15ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.16<< <ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು, ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.17ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು.18ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.19<< <ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.20ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರು ಅಥವಾ ಕುಳಿತುಕೊಂಡರು ಅದು ಅಶುದ್ಧವಾಗಿರುವುದು.21ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.22ಅವಳು ಯಾವುದರ ಮೇಲೆ ಕುಳಿತ್ತಿದ್ದಳೋ ಅದನ್ನು ಮುಟ್ಟಿದವರು ಅವರ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.23ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಅಥವಾ ಕುಳಿತ್ತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.24ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿದರೆ, ಅವಳ ಋತುಸ್ರಾವ ಅವನಿಗೆ ತಗುಲಿದರೆ, ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು.25<< <ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು.26ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.27ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದ್ದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.28ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕ ಹಾಕಿಕೊಂಡ ತರುವಾಯ ಶುದ್ಧಳಾಗುವಳು.29ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.30ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು.31<< <ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.32<< <ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,33ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀ ಮತ್ತು ಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಿದವನು ಇವರ ವಿಷಯವಾಗಿ ಇದೇ ನಿಯಮ> >> ಎಂದು ಹೇಳಿದನು.
16ದೋಷಪರಿಹಾರಕದ ಮಹಾದಿನ
1ಆರೋನನ ಇಬ್ಬರು ಮಕ್ಕಳು ಯೆಹೋವನ ಸನ್ನಿಧಿಗೆ ಬಂದು ನಾಶವಾದ ಮೇಲೆ ಯೆಹೋವನು ಮೋಶೆಯ ಸಂಗಡ ಮಾತನಾಡಿ,2<<ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.3ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಲ್ಲಿ ಬರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಹೋರಿಯನ್ನು ಮತ್ತು ಸರ್ವಾಂಗಹೋಮಕ್ಕಾಗಿ ಟಗರನ್ನು ತರಬೇಕು.4ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.5ಇಸ್ರಾಯೇಲರ ಜನಸಮೂಹದಿಂದ ದೋಷಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.6ಆರೋನನು ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರ ಮಾಡಬೇಕು.7ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.8ಆಗ ಅವನು ಆ ಹೋತಗಳಲ್ಲಿ ಒಂದು ಯೆಹೋವನಿಗೋಸ್ಕರವೆಂದು ಮತ್ತೊಂದು ಅಜಾಜೇಲನಿಗೋಸ್ಕರವೆಂದು ಚೀಟುಗಳನ್ನು ಬರೆದು ಹಾಕಬೇಕು.9ಯಾವ ಹೋತ ಯೆಹೋವನದೆಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಬೇಕು.10ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷವನ್ನು ಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಬೇಕು.11<<ಆರೋನನು ತನಗಾಗಿ ದೋಷಪರಿಹಾರಕ ಯಜ್ಞದ ಹೋರಿಯನ್ನು ಸಮರ್ಪಿಸಿ ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರವನ್ನು ಮಾಡಬೇಕು.12ಅವನು ತನಗೋಸ್ಕರ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ, ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ಅವುಗಳನ್ನು ತೆರೆಯೊಳಗೆ ತರಬೇಕು.13ಅವನು ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಆ ಧೂಪದ ಹೊಗೆಯು ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಆವರಿಸಿಕೊಳ್ಳುವುದು.14ಆಗ ಅವನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು.15<<ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು.16ಹೀಗೆ ಇಸ್ರಾಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಅವನು ಹಾಗೆಯೇ ದೋಷಪರಿಹಾರ ಮಾಡುವನು.17ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾ ಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಬಾರದು. ಹಾಗೆ ತನಗಾಗಿಯೂ, ತನ್ನ ಮನೆತನದವರಿಗಾಗಿಯೂ ಮತ್ತು ಇಸ್ರಾಯೇಲರ ಎಲ್ಲಾ ಜನಸಮೂಹಕ್ಕಾಗಿಯೂ ದೋಷಪರಿಹಾರ ಮಾಡುವನು.18ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಹಾಗೂ ಆ ಹೋತದ ರಕ್ತದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.19ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಾಯೇಲರಿಂದ ಅದಕ್ಕೆ ಉಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.20<<ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ ಇವುಗಳಿಗೋಸ್ಕರ ದೋಷಪರಿಹಾರ ಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಬೇಕು.21ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.22ಆ ಹೋತ ಅವರ ಎಲ್ಲಾ ಪಾಪಗಳನ್ನು ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಪ್ರದೇಶಕ್ಕೆ ಹೋಗುವಂತೆ ಆ ಮನುಷ್ಯನು ಅದನ್ನು ಅರಣ್ಯಕ್ಕೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.23<<ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಡಬೇಕು.24ಅವನು ಪವಿತ್ರ ಸ್ಥಳದ ಪ್ರಾಕಾರದಲ್ಲಿ ಸ್ನಾನಮಾಡಿ, ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನಗಾಗಿಯೂ ಮತ್ತು ಜನಸಮೂಹಕ್ಕಾಗಿಯೂ ಸರ್ವಾಂಗಹೋಮಗಳನ್ನು ಸಮರ್ಪಿಸಿ, ತನಗಾಗಿಯೂ ಮತ್ತು ಜನರಿಗಾಗಿಯೂ ದೋಷಪರಿಹಾರ ಮಾಡಬೇಕು.25ಅವನು ದೋಷಪರಿಹಾರಕ ಯಜ್ಞಪಶುಗಳ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು.26<<ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.27ದೋಷಪರಿಹಾರಕ ಯಜ್ಞಪಶುಗಳಾದ ಹೋರಿ ಮತ್ತು ಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ, ಚರ್ಮ, ಮಾಂಸ ಮತ್ತು ಕಲ್ಮಷಗಳೆಲ್ಲವನ್ನು ಬೆಂಕಿಯಿಂದ ಸುಡಿಸಬೇಕು.28ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯದೊಳಗೆ ಬರಬೇಕು.ಪ್ರಾಯಶ್ಚಿತ್ತ ದಿನಾಚರಣೆ
29<<ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.30ಏಕೆಂದರೆ ನೀವು ಪರಿಶುದ್ಧರಾಗುವುದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವುದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.31ಈ ದಿನ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸ ಮಾಡಬೇಕು; ಇದೇ ನಿಮಗೆ ಶಾಶ್ವತನಿಯಮ.32<<ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ಆಚರಿಸಬೇಕು. ಅವನೇ ಆ ಪರಿಶುದ್ಧವಾದ ನಾರುಮಡಿಗಳನ್ನು ಧರಿಸಿಕೊಳ್ಳಬೇಕು.33ಅವನು ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.34ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ>> ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
17ಯಜ್ಞಪಶುಗಳನ್ನು ದೇವಸ್ಥಾನದಲ್ಲಿಯೇ ವಧಿಸಬೇಕೆಂಬ ನಿಯಮ
1ಯೆಹೋವನು ಮೋಶೆಯೊಂದಿಗೆ ಮಾತನಾಡಿ,2<<ನೀನು ಆರೋನನಿಗೂ ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರಿಗೂ ಹೀಗೆ ಹೇಳಬೇಕು,3ಯೆಹೋವನು ಆಜ್ಞಾಪಿಸುವುದೇನೆಂದರೆ, <ಇಸ್ರಾಯೇಲರಲ್ಲಿ ಯಾವನಾದರೂ ಹೋರಿಯನ್ನಾಗಲಿ, ಕುರಿಯನ್ನಾಗಲಿ ಅಥವಾ ಆಡನ್ನಾಗಲಿ ಕೊಯ್ಯುವಾಗ,4ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.5ಏಕೆಂದರೆ ಯಜ್ಞಪಶುಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು, ಯೆಹೋವನ ಮುಂದೆ ಸಮಾಧಾನಯಜ್ಞವಾಗಿ ಯೆಹೋವನಿಗೆ ಸಮರ್ಪಿಸಬೇಕು.6ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಯಜ್ಞವೇದಿಗೆ ಎರಚಿ, ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.7ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.>ರಕ್ತವನ್ನು ಭುಜಿಸಲೇ ಬಾರದೆಂಬ ನಿಯಮ
8<<ಇದಲ್ಲದೆ ನೀನು ಅವರಿಗೆ ಹೀಗೆ ಆಜ್ಞಾಪಿಸು, <ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸಮಾಡುತ್ತಿರುವ ಅನ್ಯದೇಶದವರಲ್ಲಿಯಾಗಲಿ ಯಾರಾದರೂ ಸರ್ವಾಂಗಹೋಮವನ್ನು ಅಥವಾ,9ಬೇರೆ ವಿಧವಾದ ಯಜ್ಞವನ್ನು ಮಾಡುವಾಗ ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತೆಗೆದುಕೊಂಡು ಬಾರದಿದ್ದರೆ ಅವನು ಕುಲದಿಂದ ಹೊರಗೆ ಹಾಕಬೇಕು.10<< <ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.11ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.12ಆದುದರಿಂದ ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಇಸ್ರಾಯೇಲರಿಗೆ ಆಜ್ಞಾಪಿಸಿದ್ದೇನೆ.13<< <ಇಸ್ರಾಯೇಲರಲ್ಲಾಗಲಿ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು.14ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.15<< <ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.16ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಅಥವಾ ಸ್ನಾನ ಮಾಡದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು> >> ಎಂದು ಹೇಳಿದನು.
18ಧರ್ಮವಿರುದ್ಧವಾದ ಲೈಂಗಿಕ ನಿಯಮಗಳು
1ಯೆಹೋವನು ಮೋಶೆಯೊಂದಿಗೆ ಮಾತನಾಡಿ,2<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ನಾನು ನಿಮ್ಮ ದೇವರಾಗಿರುವ ಯೆಹೋವನು.3ನೀವು ವಾಸವಾಗಿದ್ದ ಐಗುಪ್ತ ದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್ ದೇಶದ ಆಚರಣೆಗಳನ್ನು ನೀವು ಅನುಸರಿಸಬಾರದು, ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು.4ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು.5ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.6<< <ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು.7ತಾಯಿಯನ್ನು ಎಷ್ಟು ಮಾತ್ರವೂ ಸಂಗಮಿಸಬಾರದು, ಆಕೆ ಹೆತ್ತವಳಲ್ಲವೇ; ಸಂಗಮಿಸಿದರೆ ತಂದೆಗೆ ಮಾನಭಂಗವಾಗುವುದು.8ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.9ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.10ಮಗನ ಮಗಳೊಂದಿಗೆ ಅಥವಾ ಮಗಳ ಮಗಳೊಂದಿಗೆ ಸಂಗಮಿಸಬಾರದು; ಅವರು ನಿಮಗೆ ಮಕ್ಕಳಂತಲ್ಲವೇ.11ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ.12ತಂದೆಯ ಒಡಹುಟ್ಟಿದವಳ ಸಂಗ ಮಾಡಬಾರದು; ಆಕೆ ನಿಮಗೆ ತಂದೆಯ ರಕ್ತಸಂಬಂಧಿ.13ತಾಯಿಯ ಒಡಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ನಿಮ್ಮ ತಾಯಿಯ ರಕ್ತಸಂಬಂಧಿ.14ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಜೊತೆ ಸಂಗಮಿಸಬಾರದು. ಅವರು ನಿಮ್ಮ ದೊಡ್ಡಮ್ಮ ಇಲ್ಲವೇ ಚಿಕ್ಕಮ್ಮ ಅಲ್ಲವೇ.15ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ.16ಅತ್ತಿಗೆ ಮತ್ತು ನಾದಿನಿಯರನ್ನು ಸಂಗಮಿಸಬಾರದು; ಅವರು ಅಣ್ಣ ಅಥವಾ ತಮ್ಮಂದಿರ ಹೆಂಡತಿಯರಲ್ಲವೇ.17ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ.18ಹೆಂಡತಿಯು ಜೀವದಿಂದಿರುವಾಗಲೇ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನು ಉಂಟುಮಾಡಬಾರದು.19<< <ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು.20ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.21<< <ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.22<< <ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ.23ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.24<< <ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.25ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು.26ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು.27ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ.28ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.29ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.30ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು> >> ಎಂದು ಹೇಳಿದನು.
19ಇಸ್ರಾಯೇಲರು ಅನುಸರಿಸಬೇಕಾದ ಧರ್ಮ ನಿಯಮಗಳು
1ಯೆಹೋವನು ಮೋಶೆಯೊಂದಿಗೆ ಮಾತನಾಡಿ,2<<ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, <ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.3<< <ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.4<< <ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.5<< <ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.6ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಇಲ್ಲವೇ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.7ಮೂರನೆಯ ದಿನದ ತನಕ ಉಳಿದದ್ದು ಹೇಯವಾದುದರಿಂದ ಅದರಲ್ಲಿ ಏನಾದರೂ ತಿಂದರೆ ಆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವುದೇ ಇಲ್ಲ.8ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.9<< <ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.10ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.11<< <ಕದಿಯಬಾರದು,<< <ಮೋಸಮಾಡಬಾರದು,
<< <ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.
12<< <ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.13<< <ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.14ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.15<< <ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.16<< <ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.17<< <ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.18<< <ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.19<< <ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು.<< <ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು;
<< <ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು;
<< <ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.
20<< <ಒಬ್ಬನ ಅಧೀನದಲ್ಲಿರುವ ದಾಸಿ ಹಣಕೊಡುವುದರಿಂದಾಗಲಿ ಅಥವಾ ಉಚಿತವಾಗಿಯಾಗಲಿ ಬಿಡುಗಡೆಯನ್ನು ಹೊಂದದೆ ಇದ್ದರೆ, ಯಾವನಾದರೂ ಅವಳನ್ನು ಸಂಗಮಿಸಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯವಾಗಿ ನ್ಯಾಯವಿಚಾರಣೆ ಆಗಬೇಕು. ಅವಳು ಸ್ವತಂತ್ರಳಲ್ಲವಾದುದರಿಂದ ಅವರಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.21ಆ ಪುರುಷನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು.22ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತಯಜ್ಞವಾಗಿ ಯೆಹೋವನಿಗೆ ಸಮರ್ಪಿಸಿ, ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.23<< <ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.24ನಾಲ್ಕನೆಯ ವರ್ಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರದಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.25ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.26<< <ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು.<< <ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.
27<< <ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು.28<< <ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.29<< <ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು.30<< <ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.31<< <ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.32<< <ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.33<< <ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.34ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.35<< <ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.36ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.37ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು> >> ಎಂದು ಹೇಳಿದನು.
20ದೈವಾಜ್ಞೆಮೀರಿ ದುರಾಚಾರ ಮಾಡುವವರಿಗೆ ನೇಮಕವಾದ ಶಿಕ್ಷೆಗಳು
1ಯೆಹೋವನು ಮೋಶೆಯೊಂದಿಗೆ ಮಾತನಾಡಿ,2<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.3ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.4ಆ ಮನುಷ್ಯನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟಾಗ ಸ್ವದೇಶದವರು ಅವನನ್ನು ಕೊಲ್ಲದೆ ಅವನು ಮಾಡಿದ ಕೆಲಸವನ್ನು ನೋಡಿಯೂ ನೋಡದವರಂತಿದ್ದರೆ,5ಆಗ ನಾನು ಆ ಮನುಷ್ಯನಿಗೂ ಮತ್ತು ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆ ಮಾಡಿದವರೆಲ್ಲರನ್ನು ಕುಲದಿಂದ ತೆಗೆದುಹಾಕುವೆನು.6<< <ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.7ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.8ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧಜನವಾಗುವಂತೆ ಮಾಡುವ ಯೆಹೋವನು.9<< <ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.10<< <ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.11ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.12ಯಾವನಾದರೂ ಸೊಸೆಯನ್ನು ಸಂಗಮಿಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿರುವುದರಿಂದ ಆ ಶಿಕ್ಷೆಗೆ ಅವರೇ ಕಾರಣರು.13ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.14ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು.15ಯಾವನಾದರೂ ಪಶುಸಂಗ ಮಾಡಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ಆ ಪಶುವನ್ನು ಕೊಲ್ಲಿಸಬೇಕು.16ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನು ಮತ್ತು ಪಶುವನ್ನು ಕೊಲ್ಲಿಸಬೇಕು; ಅವಳಿಗೂ ಹಾಗೂ ಅದಕ್ಕೂ ಮರಣವೇ ನಿಯಮ; ಆ ಮರಣ ಶಿಕ್ಷೆಗೆ ತಾವೇ ಕಾರಣರು.17ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಹಾಗು ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದ್ದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.18ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ರಕ್ತಸ್ರಾವದ ಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದುದರಿಂದ ಅವರಿಬ್ಬರನ್ನು ಕುಲದಿಂದ ಹೊರಗೆ ಹಾಕಬೇಕು.19ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.20ಯಾವನಾದರೂ ದೊಡ್ಡಮ್ಮ ಅಥವಾ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಮತ್ತು ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದುದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು.21ಯಾವನಾದರೂ ಅತ್ತಿಗೆ ಇಲ್ಲವೇ ನಾದಿನಿಯರನ್ನು ಸಂಗಮಿಸಿದರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು; ಅವರಿಗೆ ಸಂತಾನವಿರುವುದಿಲ್ಲ.22<< <ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ.23ನಾನು ನಿಮಗಿಂತ ಮೊದಲು ಹೊರಡಿಸಿದ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದ್ದರಿಂದ ನನಗೆ ಅಸಹ್ಯವಾದಾರು.24ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.25<< <ನೀವು ಶುದ್ಧ ಮತ್ತು ಅಶುದ್ಧ ಪಶುಗಳನ್ನು ಹಾಗು ಪಕ್ಷಿಗಳನ್ನು ಪ್ರತ್ಯೇಕಿಸುವ ವಿವೇಚನೆ ಹೊಂದಿರಬೇಕು. ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶು, ಪಕ್ಷಿ ಹಾಗು ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಅಸಹ್ಯಮಾಡಿಕೊಳ್ಳಬಾರದು.26ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು.27<< <ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು> >> ಎಂದು ಹೇಳಿದನು.
21ದೇವರ ಘನತೆ ಗೌರವವನ್ನು ಉಳಿಸುವಂತೆ ಯಾಜಕರಿಗೆ ಎಚ್ಚರಿಕೆ
1ಯೆಹೋವನು ಮೋಶೆಯೊಂದಿಗೆ ಮಾತನಾಡಿ, <<ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, <ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.2ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು ಮತ್ತು ಅಣ್ಣತಮ್ಮಂದಿರು ಇವರಿಗೋಸ್ಕರ ಈ ನಿಯಮ ಇರುವುದಿಲ್ಲ.3ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನು ಮದುವೆಯಾಗದೆ ಅವನ ಆಶ್ರಯದಲ್ಲಿರುವುದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು.4ಅವನು ಕುಲದಲ್ಲಿ ನಾಯಕನಾಗಿರುವುದರಿಂದ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು, ಮಾಡಿದರೆ ಯಾಜಕಸೇವೆಗೆ ಅಯೋಗ್ಯನಾದಾನು.5 ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು.6ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.7ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.8ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.9ಯಾಜಕನ ಮಗಳು ವೇಶ್ಯೆ ಎಂಬ ನಿಂದೆಗೆ ಒಳಗಾದರೆ ತನ್ನ ತಂದೆಯನ್ನು ನಿಂದೆಗೆ ಒಳಪಡಿಸಿದವಳಾದಳು, ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.10<< <ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು.11ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.12ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.13ಅವನು ಕನ್ನಿಕೆಯನ್ನು ಮದುವೆ ಮಾಡಿಕೊಳ್ಳಬೇಕು.14ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.15ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು> >> ಎಂದು ಹೇಳಿದನು.ಅಂಗಹೀನರು ಯಾಜಕ ಉದ್ಯೋಗವನ್ನು ನಡೆಸಬಾರದೆಂಬ ನಿಯಮ
16ಯೆಹೋವನು ಮೋಶೆಯೊಂದಿಗೆ ಮಾತನಾಡಿ,17<<ನೀನು ಆರೋನನಿಗೆ ಹೀಗೆ ಆಜ್ಞಾಪಿಸು, <ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.18ಅವನು ಕುರುಡನಾಗಲಿ, ಕುಂಟನಾಗಲಿ, ವಿಕಾರ ಮುಖವುಳ್ಳವನಾಗಲಿ,19ವಿಪರೀತ ಅವಯವಗಳುಳ್ಳವನಾಗಲಿ, ಕೈಕಾಲು ಮುರಿದವನಾಗಲಿ,20ಗೂನು ಇಲ್ಲವೇ ಕುಬ್ಜರಾಗಲಿ, ಹೂಗಣ್ಣ ಅಥವಾ ಕಾಯಿಗಣ್ಣನಾಗಲಿ, ಕಜ್ಜಿ, ತುರಿಗಳುಳ್ಳವನಾಗಲಿ,21ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.22ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.23ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು> >> ಎಂದು ಹೇಳಿದನು.24ಮೋಶೆಯು ಆರೋನನಿಗೂ, ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರೆಲ್ಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.
22ಪರಿಶುದ್ಧ ದ್ರವ್ಯಗಳನ್ನು ಸಾಧಾರಣವೆಂದೆಣಿಸಿಬಾರದೆಂಬ ಯೆಹೋವನ ನಿಯಮ
1ಯೆಹೋವನು ಮೋಶೆಯೊಂದಿಗೆ ಮಾತನಾಡಿ,2<<ಆರೋನನೂ ಮತ್ತು ಅವನ ಮಕ್ಕಳೂ ತಾವು ಅಶುದ್ಧರಾಗಿರುವಾಗ ಇಸ್ರಾಯೇಲರಿಂದ ನನಗೆ ಸಮರ್ಪಿಸಲ್ಪಟ್ಟ ಪರಿಶುದ್ಧ ದ್ರವ್ಯಗಳನ್ನು ಮುಟ್ಟಬಾರದೆಂದು ಅವರಿಗೆ ಆಜ್ಞಾಪಿಸು. ಅವರು ನನ್ನ ಪರಿಶುದ್ಧ ನಾಮದ ಘನತೆಗೆ ಕುಂದನ್ನು ತರಬಾರದು; ನಾನು ಯೆಹೋವನು.3ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, <ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು.4ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಖಲನ ಮಾಡಿಕೊಂಡವನಾಗಲಿ,5ಹರಿದಾಡುವ ಅಶುದ್ಧವಾದ ಕ್ರಿಮಿಕೀಟ ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಅಶುದ್ಧನಾಗಿರುವನು.6<< <ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು.7ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ.8ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.9ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.10<< <ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.11ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.12ಯಾಜಕನ ಮಗಳು ಯಾಜಕನಲ್ಲದ ಇತರರಿಗೆ ಮದುವೆಯಾಗಿದ್ದರೆ ಅವಳು ನೈವೇದ್ಯದ ಪದಾರ್ಥಗಳನ್ನು ಊಟಮಾಡಬಾರದು.13ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.14ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅದನ್ನು ಮತ್ತು ಅದರ ಐದನೆಯ ಭಾಗವನ್ನು ಯಾಜಕನಿಗೆ ತಂದುಕೊಡಬೇಕು.15ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯದ ಪದಾರ್ಥಗಳನ್ನು ಯಾಜಕರು ಸಾಧಾರಣವೆಂದು ಎಣಿಸಬಾರದು.16ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು> >> ಎಂದು ಹೇಳಿದನು.ಪೂರ್ಣಾಂಗವಾದ ಪಶುಗಳನ್ನೇ ಸಮರ್ಪಿಸಬೇಕೆಂಬ ನಿಯಮ
17ಯೆಹೋವನು ಮೋಶೆಯೊಂದಿಗೆ ಮಾತನಾಡಿ,18<<ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, <ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ,19ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಅಥವಾ ಆಡು ಮತ್ತು ಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಸಮರ್ಪಿಸಬೇಕು.20ಕುಂದುಕೊರತೆ ಇರುವಂಥದ್ದನ್ನು ತರಬಾರದು; ಅಂಥದು ಸಮರ್ಪಣೆ ಆಗುವುದಿಲ್ಲ.21ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು.22ಕುರುಡಾದದ್ದು, ಕುಂಟಾದದ್ದು, ಗಾಯವಾದದ್ದು, ಹುಣ್ಣುಳ್ಳದ್ದು, ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೇಬಾರದು, ಯಜ್ಞವೇದಿಯ ಮೇಲೆ ಹೋಮ ಮಾಡಲೇಬಾರದು.23ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಣೆ ಆಗುವುದಿಲ್ಲ.24ಬೀಜಹೊಡೆದ, ಕುಟ್ಟಿದ, ಒಡೆದ ಮತ್ತು ಕೊಯ್ದ ಪಶುವನ್ನು ಯೆಹೋವನಿಗೆ ಸಮರ್ಪಿಸಬಾರದು, ಮತ್ತು ನಿಮ್ಮ ದೇಶದಲ್ಲಿ ಪಶುಗಳಿಗೆ ಹಾಗೆ ಮಾಡಲೇ ಬಾರದು.25ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ> >> ಅಂದನು.26ಯೆಹೋವನು ಮೋಶೆಯೊಂದಿಗೆ ಮಾತನಾಡಿ,27<<ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು.28ಹೆತ್ತ ಆಕಳನ್ನು, ಅದರ ಕರುವನ್ನು ಇಲ್ಲವೆ ಈದ ಆಡು, ಕುರಿಗಳನ್ನು, ಅವುಗಳ ಮರಿಗಳನ್ನು ಒಂದೇ ದಿನದಲ್ಲಿ ವಧಿಸಬಾರದು.29<<ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.30ಅದೇ ದಿನದಲ್ಲಿ ಅದನ್ನು ಊಟಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. ನಾನು ಯೆಹೋವನು.31<<ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು.32ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.33ನಿಮ್ಮ ದೇವರಾಗುವುದಕ್ಕೆ ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದೆನಲ್ಲಾ; ನಾನು ಯೆಹೋವನು>> ಎಂದು ಹೇಳಿದನು.
23ಇಸ್ರಾಯೇಲರು ಆಚರಿಸಬೇಕಾದ ಹಬ್ಬ ಉತ್ಸವಗಳು
1ಯೆಹೋವನು ಮೋಶೆಯೊಂದಿಗೆ ಮಾತನಾಡಿ,2<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.ಸಬ್ಬತ್
3<< <ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.4<< <ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು.ಪಸ್ಕ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ
5<< <ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಯೆಹೋವನು ನೇಮಿಸಿದ ಪಸ್ಕ ಹಬ್ಬವನ್ನು ಆಚರಿಸಬೇಕು.6ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.7ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.8ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು> >> ಅಂದನು.ಪ್ರಥಮಫಲದ ಸಮರ್ಪಣೆ
9ಯೆಹೋವನು ಮೋಶೆಯೊಂದಿಗೆ ಮಾತನಾಡಿ,10<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು.11ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು.12ಆ ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರ್ಷದ ಪೂರ್ಣಾಂಗವಾದ ಟಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.13ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.14ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.ಸುಗ್ಗಿ ಹಬ್ಬ
15<< <ಸಬ್ಬತ್ ದಿನದ ಮರುದಿನದಿಂದ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು.16ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸಬೆಳೆಯ ಧಾನ್ಯನೈವೇದ್ಯವನ್ನು ಸಮರ್ಪಿಸಬೇಕು.17ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.18ಆ ರೊಟ್ಟಿಗಳೊಡನೆ ಒಂದು ವರ್ಷದ ಪೂರ್ಣಾಂಗವಾದ ಏಳು ಕುರಿಗಳನ್ನು, ಒಂದು ಹೋರಿಯನ್ನು ಮತ್ತು ಎರಡು ಟಗರುಗಳನ್ನು ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆ ಮತ್ತು ಪಾನದ್ರವ್ಯದೊಡನೆ ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುವವು.19ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಮತ್ತು ಸಮಾಧಾನ ಯಜ್ಞಕ್ಕಾಗಿ ಒಂದು ವರ್ಷದ ಎರಡು ಟಗರುಗಳನ್ನು ಸಮರ್ಪಿಸಬೇಕು.20ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.21ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.22<< <ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು> >> ಎಂದು ಹೇಳಿದನು.ತುತ್ತೂರಿಗಳ ಹಬ್ಬ
23ಯೆಹೋವನು ಮೋಶೆಯೊಂದಿಗೆ ಮಾತನಾಡಿ,24<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.25ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು> >> ಅಂದನು.ಪಾಪಪರಿಹಾರಕ ದಿನ
26ಯೆಹೋವನು ಮೋಶೆಯೊಂದಿಗೆ ಮಾತನಾಡಿ,27<<ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.28ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.29ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.30ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಮಾಡಿದರೆ ಅವನನ್ನು ಇಸ್ರಾಯೇಲರಲ್ಲಿ ಇರದಂತೆ ನಾಶಮಾಡುವೆನು.31ಆ ದಿನದಲ್ಲಿ ಯಾವ ಕೆಲಸವನ್ನು ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.32ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು>> ಎಂದು ಹೇಳಿದನು.ಪರ್ಣಶಾಲೆಗಳ ಹಬ್ಬ
33ಯೆಹೋವನು ಮೋಶೆಯೊಂದಿಗೆ ಮಾತನಾಡಿ,34<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.35ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಯಾವ ಉದ್ಯೋಗವನ್ನು ನಡೆಸಬಾರದು.36ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು.37<< <ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.38ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಯೆಹೋವನು ನೇಮಿಸಿರುವ ಸಬ್ಬತ್ ದಿನದಲ್ಲಿ ಮಾತ್ರವಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಸಮರ್ಪಿಸಬೇಕು.39<< <ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು.40ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.41ಹೀಗೆ ಪ್ರತಿ ವರ್ಷದಲ್ಲಿಯೂ ಏಳು ದಿನಗಳ ವರೆಗೆ ಈ ಹಬ್ಬವನ್ನು ಆಚರಿಸಬೇಕು; ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಇದು ಶಾಶ್ವತನಿಯಮ; ಏಳನೆಯ ತಿಂಗಳಿನಲ್ಲಿ ಇದನ್ನು ಆಚರಿಸಬೇಕು.42ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು, ಸ್ವದೇಶಸ್ಥರಾದ ಇಸ್ರಾಯೇಲರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು.43ನಾನು ನಿಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದಾಗ ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಯೆಹೋವನು> >> ಅಂದನು.44ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳ ವಿಷಯವಾಗಿ ಮೋಶೆಯು ಅದೇ ಮೇರೆಗೆ ಇಸ್ರಾಯೇಲರಿಗೆ ತಿಳಿಸಿದನು.
24ದೇವಸ್ಥಾನದ ದೀಪಸ್ತಂಭ
1ಯೆಹೋವನು ಮೋಶೆಯ ಸಂಗಡ ಮಾತನಾಡಿ,2<<ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವುದಕ್ಕಾಗಿ ಇಸ್ರಾಯೇಲರು ಎಣ್ಣೆಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.3ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಪೆಟ್ಟಿಗೆಯ ಮುಂದಣ ತೆರೆಯ ಹೊರಗೆ, ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ಜಾವದ ವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.4ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಟ್ಟು ನಿರ್ವಹಿಸಬೇಕು.ಪವಿತ್ರವಾದ ರೊಟ್ಟಿ
5<<ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು .6ಅವುಗಳನ್ನು ಆರಾರು ರೊಟ್ಟಿಗಳ ಮೇರೆಗೆ ಎರಡು ರಾಶಿಗಳಾಗಿ, ಚೊಕ್ಕಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು.7ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು.8ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.9ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು>> ಅಂದನು.ದೇವದೂಷಕನಿಗೆ ಮರಣಶಿಕ್ಷೆ
10ಇಸ್ರಾಯೇಲ್ ಸ್ತ್ರೀಯಲ್ಲಿ ಐಗುಪ್ತ ಪುರುಷನಿಂದ ಹುಟ್ಟಿದವನೊಬ್ಬನು ಇಸ್ರಾಯೇಲರ ಪಾಳೆಯದಲ್ಲಿ, ಇಸ್ರಾಯೇಲನಾದ ಒಬ್ಬ ಮನುಷ್ಯನ ಸಂಗಡ ಜಗಳವಾಡುತ್ತಾ ಬಂದನು.11ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.12ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ತನಕ ಅವನನ್ನು ಕಾವಲಲ್ಲಿರಿಸಿದರು.13ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,14<<ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.15ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, <ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.16ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.17<< <ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.18ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು, ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.19ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು.20ಅವಯವವನ್ನು ಮುರಿದವನಿಗೆ ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಸಬೇಕು. ಮತ್ತೊಬ್ಬನನ್ನು ಅಂಗಹೀನ ಮಾಡಿದವನಿಗೆ ಈ ಪ್ರಕಾರ ಪ್ರತಿಕಾರ ಮಾಡಬೇಕು.21ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.22ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು> >> ಎಂಬುದೇ.23ಮೋಶೆ ಈ ಮಾತುಗಳನ್ನು ಇಸ್ರಾಯೇಲರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು.
25ಸಬ್ಬತ್ ಸ್ವತಂತ್ರ ವರ್ಷ
1ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನೆಂದರೆ,2<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನ ಗೌರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು.3ಆರು ವರ್ಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷಿ ತೋಟದ ಕೆಲಸವನ್ನು ನಡೆಸಬಹುದು ಮತ್ತು ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು.4ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.5ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.6ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ,7ನಿಮ್ಮ ಬಳಿಯಲ್ಲಿ ವಾಸವಾಗಿರುವವರಿಗೂ, ನಿಮ್ಮ ಪಶುಗಳಿಗೂ ಮತ್ತು ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು.ಜೂಬಿಲಿ ಎಂಬ ಬಿಡುಗಡೆಯ ಸಂವತ್ಸರ
8<< <ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.9ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು.10ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.11ಆ ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳದ ಹಣ್ಣನ್ನು ಸಂಗ್ರಹಿಸಬಾರದು.12ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬೇಕು.13<< <ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.14ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.15ಹಿಂದಿನ ಜೂಬಿಲಿ ಸಂವತ್ಸರದಿಂದ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ, ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅದರಂತೆ ಮಾರುವವನು ಎಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.16ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು, ಕಡಿಮೆಯಾದರೆ ಕಡಿಮೆ ಮಾಡಬೇಕು; ಏಕೆಂದರೆ ಅವನು ಮಾರುವುದು ಭೂಮಿಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ.17ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.18<< <ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ.19ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.20<< <ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?> ಎಂದು ವಿಚಾರಿಸುತ್ತೀರೋ21ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.22ನೀವು ಎಂಟನೆಯ ವರ್ಷದಲ್ಲಿ ಬೀಜವನ್ನು ಬಿತ್ತಿ, ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರ್ಷದ ವರೆಗೆ ಹಿಂದಿನ ವರ್ಷಗಳಲ್ಲಿ ನೀವು ಸಂಗ್ರಹಿಸಿದ ಬೆಳೆಯಿಂದಲೇ ಜೀವನಮಾಡುವಿರಿ.ಸ್ಥಿರ ಆಸ್ತಿಗಳ ಬಿಡುಗಡೆ
23<< <ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.24ನಿಮ್ಮಲ್ಲಿ ಮತ್ತೊಬ್ಬನ ಸ್ವತ್ತಿನ ಭೂಮಿ ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.25<< <ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.26ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ,27ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು ಉಳಿದ ಕ್ರಯವನ್ನು ಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.28ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.29<< <ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.30ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.31ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.32ಆದರೆ ಲೇವಿಯರ ಸ್ವತ್ತಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವುದು.33ಲೇವಿಯರೊಳಗೆ ಯಾರೂ ಅದನ್ನು ಬಿಡಿಸದೆಹೋದರೆ, ಲೇವಿಯರ ಸ್ವಂತವಾಗಿರುವ ಅಂತಹ ಪಟ್ಟಣಗಳಲ್ಲಿ ಮಾರಲ್ಪಟ್ಟ ಮನೆ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಲೇವಿಯರ ಪಟ್ಟಣಗಳಲ್ಲಿನ ಮನೆಗಳು ಇಸ್ರಾಯೇಲರ ಮಧ್ಯದಲ್ಲಿರುವ ಅವರ ಸ್ವಾಸ್ತ್ಯವಷ್ಡೆ.34ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಬಾರದು. ಅವು ಅವರಿಗೆ ಶಾಶ್ವತವಾದ ಸ್ವತ್ತು.ಬಡವರ ವಿಮೋಚನೆ
35<< <ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.36ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.37ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.38ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.39<< <ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.40ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.41ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು.42ಅವರು ನನಗೆ ಗುಲಾಮರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.43ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.44ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು.45ನಿಮ್ಮ ನಡುವೆ ಇರುವ ವಿದೇಶಿಯರನ್ನೂ ಮತ್ತು ನಿಮ್ಮ ದೇಶದಲ್ಲಿ ಅವರಿಂದ ಹುಟ್ಟಿದವರನ್ನೂ ಕ್ರಯಕ್ಕೆ ತೆಗೆದುಕೊಳ್ಳಬಹುದು; ಅಂಥವರು ನಿಮಗೆ ಸೊತ್ತಾಗಬಹುದು.46ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.47<< <ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.48ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು.49ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.50ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದಣ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕ ಮಾಡುವಂತೆ ಅವನ ವಿಷಯದಲ್ಲಿಯೂ ಲೆಕ್ಕ ಮಾಡಬೇಕು.51ಜೂಬಿಲಿ ಸಂವತ್ಸರವು ಬರುವುದಕ್ಕೆ ಇನ್ನು ಅನೇಕ ವರ್ಷಗಳಿದ್ದರೆ ಅವುಗಳ ಪ್ರಕಾರವೇ ತನ್ನ ಬಿಡುಗಡೆಯ ಕ್ರಯವನ್ನೂ ಕೊಡಬೇಕು.52ಕೆಲವು ವರ್ಷಗಳು ಮಾತ್ರ ಉಳಿದರೆ ಸ್ವಲ್ಪಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು.53ಅವನು ವರ್ಷವರ್ಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು.54ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.55ಏಕೆಂದರೆ ಇಸ್ರಾಯೇಲರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು> >> ಎಂದು ಹೇಳಿದನು.
26ವಿಗ್ರಹಾರಾಧನೆಯನ್ನು ಮಾಡಬಾರದೆಂಬ ನಿಯಮ
1<<ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.2ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.ವಿಧೇಯತೆ ತರುವ ಆಶೀರ್ವಾದ
3<<ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ,4ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.5ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.6ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.7ನೀವು ನಿಮ್ಮ ವೈರಿಗಳನ್ನು ಓಡಿಸುವಿರಿ ಮತ್ತು ಅವರನ್ನು ಕತ್ತಿಯಿಂದ ಸಂಹರಿಸುವಿರಿ.8ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.9ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.10ನೀವು ಬಹುದಿನದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.11ನಾನು ನಿಮ್ಮ ನಡುವೆ ವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವುದಿಲ್ಲ.12ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ.13ನೀವು ಐಗುಪ್ತ್ಯರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನು.ಅವಿಧೇಯತೆಗೆ ಶಿಕ್ಷೆ
14<<ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,15ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,16ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.17ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.18<<ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.19ನಿಮ್ಮ ಗರ್ವಕ್ಕೆ ಕಾರಣವಾದ ಬಲವನ್ನು ಮುರಿಯುವೆನು. ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣದಂತೆಯೂ ಹಾಗು ನೀವು ಸಾಗುವಳಿಮಾಡುವ ಭೂಮಿಯನ್ನು ತಾಮ್ರದಂತೆಯೂ ಮಾಡುವೆನು.20ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು; ನಿಮ್ಮ ಭೂಮಿಯಲ್ಲಿ ಬೆಳೆಯಾಗುವುದಿಲ್ಲ, ತೋಟಗಳ ಮರಗಳು ಫಲ ಕೊಡುವುದಿಲ್ಲ.21<<ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.22ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ.23<<ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ,24ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.25ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.26ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.27<<ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,28ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.29ನೀವು ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳ ಮಾಂಸವನ್ನೇ ತಿನ್ನುವಿರಿ.30ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.31ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.32ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡುವೆನು; ಅದರಲ್ಲಿ ವಾಸವಾಗಿರುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.33ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.34ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವುದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಅನುಭವಿಸುವುದು.35ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಸಬ್ಬತ್ ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿನಗಳಲ್ಲಿ ಅನುಭವಿಸುವುದು.36<<ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.37ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು; ಶತ್ರುಗಳ ಮುಂದೆ ನಿಲ್ಲಲಾರದೆ ತತ್ತರಿಸುವಿರಿ.38ಅನ್ಯಜನಗಳಲ್ಲಿ ಚದರಿಸಲ್ಪಟ್ಟು ಕಾಣಿಸದೆ ಹೋಗುವಿರಿ, ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ನುಂಗಿಬಿಡುವುದು.39ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.40<<ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ41ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ,42ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.43ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು. ಅವರು ಯೆಹೋವನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವುದು.44ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ, ತಾತ್ಸಾರಮಾಡುವುದಿಲ್ಲ; ನಾನು ಅವರಿಗೆ ಮಾಡಿದ ಒಡಂಬಡಿಕೆಯನ್ನು ಮೀರುವುದಿಲ್ಲ, ಅವರನ್ನು ಇಲ್ಲದಂತೆ ಮಾಡುವುದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.45ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು>> ಎಂಬುದೇ.46ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳೇ ಇವು.
27ಯೆಹೋವನಿಗೆ ತೀರಿಸಬೇಕಾದ ಹರಕೆಗಳು
1ಯೆಹೋವನು ಮೋಶೆಯ ಸಂಗಡ ಮಾತನಾಡಿ,2<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು.3ಇಪ್ಪತ್ತು ವರ್ಷದಿಂದ ಅರುವತ್ತು ವರ್ಷದ ವರೆಗಿನ ವಯಸ್ಸುಳ್ಳ ಪುರುಷನಿಗೋಸ್ಕರ, ದೇವಾಲಯದ ಶೆಕೆಲ್ ಗೆ ಸರಿಯಾಗಿ ಐವತ್ತು ಶೆಕೆಲ್ ಬೆಳ್ಳಿಯನ್ನು ಸಮರ್ಪಿಸಬೇಕು.4ಅದೇ ವಯಸ್ಸಿನ ಸ್ತ್ರೀಗೋಸ್ಕರ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.5ಐದು ವರ್ಷದ ವಯಸ್ಸಿನಿಂದ ಇಪ್ಪತ್ತು ವರ್ಷದ ವಯಸ್ಸಿನ ವರೆಗೆ ಪುರುಷನಿಗೋಸ್ಕರ ಇಪ್ಪತ್ತು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.6ಒಂದು ತಿಂಗಳಿನ ವಯಸ್ಸು ಮೊದಲುಗೊಂಡು ಐದು ವರ್ಷದ ವಯಸ್ಸಿನ ಹುಡುಗನಿಗೋಸ್ಕರ ಐದು ಶೆಕೆಲ್ ಬೆಳ್ಳಿಯನ್ನು, ಹುಡುಗಿಗೋಸ್ಕರ ಮೂರು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.7ಅರವತ್ತು ವರ್ಷಗಳ ಪ್ರಾಯವನ್ನು ದಾಟಿದ ಪುರುಷನಿಗೋಸ್ಕರ ಹದಿನೈದು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.8ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.9<< <ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು.10ಅದನ್ನು ಬದಲಾಯಿಸಬಾರದು, ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನೂ ಇಲ್ಲವೇ ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನೂ, ಒಂದಕ್ಕೆ ಬದಲಾಗಿ ಬೇರೊಂದನ್ನೂ ಕೊಡಬಾರದು. ಅವನು ಗೊತ್ತುಮಾಡಿದ ಪಶುವಿಗೆ ಬದಲಾಗಿ ಬೇರೊಂದು ಪಶುವನ್ನು ಪ್ರತ್ಯೇಕಿಸಿಟ್ಟಿರುವ ಪಕ್ಷಕ್ಕೆ, ಮೊದಲನೆಯ ಪಶುವೂ ಹಾಗೂ ಅದಕ್ಕೆ ಬದಲಾಗಿ ಇಟ್ಟ ಪಶುವೂ ಎರಡೂ ಯೆಹೋವನದಾಗಿರಬೇಕು.11ಯೆಹೋವನಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು.12ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆಯೇ ಅಂತಿಮವಾದದ್ದು ಸ್ಥಿರವಾಗಿರುವುದು.13ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.14<< <ಯಾವನಾದರೂ ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಅಂತಿಮವಾಗಿರುವುದು.15ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವುದು.16<< <ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು.17ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವುದು.18ಜೂಬಿಲಿ ಸಂವತ್ಸರದ ತರುವಾಯ ಪ್ರತಿಷ್ಠೆ ಮಾಡಿದ ಭೂಮಿಯನ್ನು ಹರಕೆಮಾಡಿದರೆ, ಮುಂದಣ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಡಿಮೆಮಾಡಬೇಕು.19ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿರುವ ಪಕ್ಷಕ್ಕೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಹೊಲ ಅವನದಾಗಿರುವುದು.20ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ.21ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.22<< <ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,23ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.24ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು.25 ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು.26<< <ಶುದ್ಧ ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವುದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಬಾರದು; ಹೋರಿಯಾಗಿದ್ದರೂ, ಆಡು ಅಥವಾ ಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.27ಅಶುದ್ಧ ಪಶುವಿನಲ್ಲಿ ಚೊಚ್ಚಲಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆ ಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು.28<< <ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.29ಕೇವಲ ಯೆಹೋವನ ಸೊತ್ತಾಗುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.ಯೆಹೋವನಿಗೆ ಸಲ್ಲಿಸಬೇಕಾದ ದಶಮಾಂಶ
30<< <ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.31ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಒಂದು ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.32ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.33ಆ ಪಶುವು ಒಳ್ಳೇದೋ ಅಥವಾ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದೂ ಮತ್ತು ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನದಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ> >> ಎಂದು ಹೇಳಿದನು.34ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞೆಗಳು ಇವೇ.
ಅರಣ್ಯಕಾಂಡ
1ಮೊದಲನೆಯ ಜನಗಣತಿ
1ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು,2<<ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.3ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಸೈನ್ಯಸೈನ್ಯವಾಗಿ ನೀನೂ ಮತ್ತು ಆರೋನನೂ ಲೆಕ್ಕಹಾಕಬೇಕು.4ಈ ಕೆಲಸಕ್ಕಾಗಿ ಕುಲದಲ್ಲಿ ಆಯಾ ಕುಲದ ಒಂದೊಂದು ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು ಹಾಗೂ ತನ್ನ ಕುಲಕ್ಕಾಗಿ ಹೋರಾಡುವ ಜನರನ್ನು ಮುಖ್ಯಸ್ಥನು ಮುನ್ನಡೆಸಬೇಕು.5ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ:ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್,
6ಸಿಮೆಯೋನ್ ಕುಲದಿಂದ ಚೂರೀಷದ್ದೈಯ ಮಗನಾದ ಶೆಲುಮೀಯೇಲ್, 7ಯೆಹೂದ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್,
8ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್,
9ಜೆಬುಲೂನ್ ಕುಲದಿಂದ ಹೇಲೋನನ ಮಗನಾದ ಎಲೀಯಾಬ್, 10ಯೋಸೇಫನ ವಂಶದವರಲ್ಲಿ: ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ,ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್,
11ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗನಾದ ಅಬೀದಾನ್, 12ದಾನ್ ಕುಲದಿಂದ ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್,
13ಆಶೇರ್ ಕುಲದಿಂದ ಒಕ್ರಾನನ ಮಗನಾದ ಪಗೀಯೇಲ್,
14ಗಾದ್ ಕುಲದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್,
15ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ.>> 16ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ ಪ್ರಮುಖರು.17ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆಯು ಮತ್ತು ಆರೋನನು ಆರಿಸಿಕೊಂಡರು.18ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು.19ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿ ಮೊಟ್ಟಮೊದಲು ಜನಗಣತಿ ಪ್ರಾರಂಭಿಸಿದನು.20ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.21ರೂಬೇನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 46,500 ಮಂದಿ.22ಸಿಮೆಯೋನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.23ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದ ಗಂಡಸರು - 59,300 ಮಂದಿ.24ಗಾದ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.25ಗಾದ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 45,650 ಮಂದಿ.26ಯೆಹೂದ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.27ಯೆಹೂದ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 74,600 ಮಂದಿ.28ಇಸ್ಸಾಕಾರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.29ಇಸ್ಸಾಕಾರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 54,400 ಮಂದಿ.30ಜೆಬುಲೂನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.31ಜೆಬುಲೂನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 57,400 ಮಂದಿ.32ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.33ಎಫ್ರಾಯೀಮ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 40,500 ಮಂದಿ.34ಮನಸ್ಸೆ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.35ಮನಸ್ಸೆ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 32,200 ಮಂದಿ.36ಬೆನ್ಯಾಮೀನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.37ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 35,400 ಮಂದಿ.38ದಾನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.39ದಾನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 62,700 ಮಂದಿ.40ಆಶೇರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.41ಆಶೇರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 41,500 ಮಂದಿ.42ನಫ್ತಾಲಿ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.43ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 53,400 ಮಂದಿ.44ಮೋಶೆ, ಆರೋನನೂ ಮತ್ತು ಇಸ್ರಾಯೇಲಿನ ಹನ್ನೆರಡು ಕುಲಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ.45ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರನ್ನು ಲೆಕ್ಕಿಸಿದರು.46ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ.47ಆದರೆ ಅವರೊಡನೆ ಲೇವಿ ಕುಲದ ಕುಟುಂಬಗಳು ಲೆಕ್ಕಿಸಲ್ಪಡಲಿಲ್ಲ.48ಏಕೆಂದರೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,49<<ನೀನು ಇಸ್ರಾಯೇಲರನ್ನು ಎಣಿಸುವಾಗ ಲೇವಿ ಕುಲದವರನ್ನು ಎಣಿಸಬಾರದು.50ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.51ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.52ಇಸ್ರಾಯೇಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.53ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.>>54ಇಸ್ರಾಯೇಲರು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.
2ಇಸ್ರಾಯೇಲರು ಪಾಳೆಯದಲ್ಲಿ ಗುಡಾರಗಳನ್ನು ಹಾಕಿಕೊಳ್ಳುವ ಕ್ರಮ
1ಯೆಹೋವನು ಮಾತನಾಡಿ ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ,2<<ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.>>3ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.4ಅವನ ಸೈನಿಕರ ಸಂಖ್ಯೆ 74,600 ಮಂದಿ.5ಯೆಹೂದ ಕುಲದ ಬಳಿಯಲ್ಲಿ ಇಳಿದುಕೊಳ್ಳುವವರು ಇಸ್ಸಾಕಾರನ ಕುಲದವರು. ಚೂವಾರನ ಮಗನಾದ ನೆತನೇಲನು ಇಸ್ಸಾಕಾರರ ಸೈನ್ಯಾಧಿಪತಿ.6ಅವನ ಸೈನಿಕರ ಸಂಖ್ಯೆ 54,400 ಮಂದಿ.7ಇಸ್ಸಾಕಾರರ ಬಳಿಯಲ್ಲಿ ಇಳಿದುಕೊಳ್ಳುವವರು ಜೆಬುಲೂನ್ ಕುಲದವರು. ಹೇಲೋನನ ಮಗನಾದ ಎಲೀಯಾಬನು ಜೆಬುಲೂನ್ಯರ ಸೈನ್ಯಾಧಿಪತಿ.8ಅವನ ಸೈನಿಕರ ಸಂಖ್ಯೆ 57,400 ಮಂದಿ.9ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು.10ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೈನ್ಯಾಧಿಪತಿ.11ಅವನ ಸೈನಿಕರ ಸಂಖ್ಯೆ 46,500 ಮಂದಿ.12ರೂಬೇನ್ ಕುಲದವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನ್ ಕುಲದವರು. ಚೂರೀಷದ್ದೈಯನ ಮಗನಾದ ಶೆಲುಮೀಯೇಲನು ಸಿಮೆಯೋನ್ ಕುಲದ ಸೈನ್ಯಾಧಿಪತಿ.13ಅವನ ಸೈನಿಕರ ಸಂಖ್ಯೆ 59,300 ಮಂದಿ.14ತರುವಾಯ ಗಾದ್ಯರ ಕುಲದವರು. ರೆಗೂವೇಲನ ಮಗನಾದ ಎಲ್ಯಾಸಾಫನು ಗಾದ್ ಕುಲದ ಸೈನ್ಯಾಧಿಪತಿ.15ಅವನ ಸೈನಿಕರ ಸಂಖ್ಯೆ 45,650 ಮಂದಿ.16ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು.17ಅನಂತರ ಸೈನ್ಯಗಳ ಮಧ್ಯದಲ್ಲಿ ದೇವದರ್ಶನದ ಗುಡಾರವು ಲೇವಿಯರ ಪಾಳೆಯದಿಂದ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮಗೆ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.18ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಷಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ.19ಅವನ ಸೈನಿಕರ ಸಂಖ್ಯೆ 40,500 ಮಂದಿ.20ಎಫ್ರಾಯೀಮ್ ಬಳಿಯಲ್ಲಿ ಮನಸ್ಸೆ ಕುಲದವರೂ ತಮ್ಮ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪೆದಾಚೂರನ ಮಗನಾದ ಗಮ್ಲೀಯೇಲ್ ಮನಸ್ಸೆ ಕುಲದ ಸೈನ್ಯಾಧಿಪತಿ.21ಅವನ ಸೈನಿಕರ ಸಂಖ್ಯೆ 32,200 ಮಂದಿ.22ತರುವಾಯ ಬೆನ್ಯಾಮೀನ ಕುಲದವರು. ಗಿದ್ಯೋನಿಯ ಮಗನಾದ ಅಬೀದಾನ್ ಬೆನ್ಯಾಮೀನ ಕುಲದ ಸೈನ್ಯಾಧಿಪತಿ.23ಅವನ ಸೈನಿಕರ ಸಂಖ್ಯೆ 35,400 ಮಂದಿ.24ಹೀಗೆ ಎಫ್ರಾಯೀಮ್ಯರ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,08,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು.25ಉತ್ತರ ದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್ ದಾನ್ ಕುಲದ ಸೈನ್ಯಾಧಿಪತಿ.26ಅವನ ಸೈನಿಕರ ಸಂಖ್ಯೆ 62,700 ಮಂದಿ.27ದಾನ್ ಕುಲದ ಬಳಿಯಲ್ಲಿ ಆಶೇರ್ ಕುಲದವರು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಒಕ್ರಾನನ ಮಗನಾದ ಪಗೀಯೇಲನು ಆಶೇರ್ ಕುಲದವರ ಸೈನ್ಯಾಧಿಪತಿ.28ಅವನ ಸೈನಿಕರ ಸಂಖ್ಯೆ 41,500 ಮಂದಿ.29ತರುವಾಯ ನಫ್ತಾಲಿ ಕುಲದವರು, ಏನಾನನ ಮಗನಾದ ಅಹೀರನು ನಫ್ತಾಲಿ ಕುಲದ ಸೈನ್ಯಾಧಿಪತಿ.30ಅವನ ಸೈನಿಕರ ಸಂಖ್ಯೆ 53,400 ಮಂದಿ.31ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು.32ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ.33ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಲೇವಿಯರು ಇಸ್ರಾಯೇಲರ ಸಂಗಡ ಲೆಕ್ಕಹಾಕಲಿಲ್ಲ.34ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು.
3ಆರೋನನ ಮಕ್ಕಳ ವಿವರಣೆ
1ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡಿದ ಕಾಲದಲ್ಲಿದ್ದ ಮೋಶೆ ಮತ್ತು ಆರೋನರ ವಂಶದವರು.2ಆರೋನನ ಮಕ್ಕಳ ಹೆಸರುಗಳು: ಚೊಚ್ಚಲ ಮಗನಾದ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರೇ.3ಇವರು ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಅಭಿಷೇಕಹೊಂದಿದವರಾಗಿ ಪ್ರತಿಷ್ಠಿತರಾದ ಆರೋನನ ಮಕ್ಕಳು.4ಆದರೆ ನಾದಾಬ್ ಮತ್ತು ಅಬೀಹೂ ಎಂಬುವವರು ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಆತನ ಸನ್ನಿಧಿಯಲ್ಲೇ ಸತ್ತು ಹೋದರು. ಅವರಿಗೆ ಮಕ್ಕಳಿರಲಿಲ್ಲ. ಆದುದರಿಂದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬಿಬ್ಬರು ತಮ್ಮ ತಂದೆಯಾದ ಆರೋನನ ಕೈಕೆಳಗೆ ಯಾಜಕಧರ್ಮವನ್ನು ನಡೆಸಿದರು.ಯಾಜಕರಿಗೆ ನೆರವಾಗಲು ಲೇವಿಯರನ್ನು ನೇಮಿಸಿದ್ದು
5ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,6<<ನೀನು ಲೇವಿಯ ಕುಲದವರನ್ನು ಹತ್ತಿರಕ್ಕೆ ಕರೆದು ಅವರು ದೇವರ ಸೇವಕಾರ್ಯಕ್ಕಾಗಿ ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲಿಸು.7<<ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು, ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಸೇವಾಕಾರ್ಯವನ್ನು ನಡೆಸಬೇಕು.8ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು. ಇಸ್ರಾಯೇಲರಿಗೋಸ್ಕರ ದೇವಸ್ಥಾನದ ಸೇವಕಾರ್ಯವನ್ನು ನಡೆಸಬೇಕು.9<<ನೀನು ಲೇವಿಯರನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಒಪ್ಪಿಸಬೇಕು. ಇಸ್ರಾಯೇಲರಲ್ಲಿ ಆರೋನನಿಗೆ ಸಂಪೂರ್ಣವಾಗಿ ಒಪ್ಪಿಸಲ್ಪಟ್ಟವರು ಇವರೇ.10ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು>> ಎಂದು ಹೇಳಿದನು.ಜೇಷ್ಠ ಪುತ್ರರ ಸ್ಥಾನಮಾನ
11ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ ಹೇಳಿದ್ದೇನೆಂದರೆ,12<<ನಾನು ಇಸ್ರಾಯೇಲರಲ್ಲಿ ಚೊಚ್ಚಲಾದ ಗಂಡಸರಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ ಎಂದು ತಿಳಿದುಕೋ. ಆದುದರಿಂದ ಲೇವಿಯರು ನನ್ನ ಸೊತ್ತು.13ಇಸ್ರಾಯೇಲರಲ್ಲಿ ಚೊಚ್ಚಲಾದವರು ನನ್ನ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರನ್ನೂ, ಪಶುಗಳನ್ನೂ ನನ್ನ ಸ್ವಂತವಾಗಿ ಪ್ರತಿಷ್ಠಿಸಿಕೊಂಡೆನು; ಅವರು ನನ್ನವರಾಗಿರಬೇಕು. ನಾನೇ ಯೆಹೋವನು>> ಎಂದು ಹೇಳಿದನು.ಲೇವಿಯರ ಎಣಿಕೆ
14ಯೆಹೋವನು ಸೀನಾಯಿ ಮರುಭೂಮಿಯಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,15<<ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರನ್ನೆಲ್ಲಾ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು>> ಎಂದು ಆಜ್ಞಾಪಿಸಿದನು.16ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಅವರನ್ನು ಲೆಕ್ಕಿಸಿದನು.17ಲೇವಿಯ ಮಕ್ಕಳು ಯಾರೆಂದರೆ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ ಇವರೇ.18ಗೋತ್ರಸ್ಥಾಪಕರಾದ ಗೇರ್ಷೋನನ ಮಕ್ಕಳು: ಲಿಬ್ನೀ, ಶಿಮ್ಮೀ ಇವರೇ.19ಗೋತ್ರಸ್ಥಾಪಕರಾದ ಕೆಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್, ಎಂಬುವವರು.20ಗೋತ್ರಸ್ಥಾಪಕರಾದ ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ಎಂಬುವವರು. ಗೋತ್ರಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು.21ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರೂ ಶಿಮ್ಮೀ ಗೋತ್ರದವರೂ ಇದ್ದರು.22ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 7,500 ಮಂದಿ.23ಗೇರ್ಷೋನ್ಯರ ಗೋತ್ರದವರು ದೇವದರ್ಶನದ ಗುಡಾರದ ಹಿಂದೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.24ಗೇರ್ಷೋನ್ಯರ ಗೋತ್ರಗಳ ಪ್ರಧಾನಪುರುಷನು ಲಾಯೇಲನ ಮಗನಾದ ಎಲ್ಯಾಸಾಫ್.25ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಗುಡಾರ ಅದರ ಮೇಲಣ ಡೇರೆಯ ಬಟ್ಟೆ, ಅದರ ಮೇಲ್ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆಗಳು,26ಗುಡಾರದ ಮತ್ತು ಯಜ್ಞವೇದಿಯ ಸುತ್ತಲಿರುವ ಅಂಗಳದ ತೆರೆಗಳೂ, ಅಂಗಳದ ಬಾಗಿಲಿನ ಪರದೆಗಳು, ಇವುಗಳ ಹಗ್ಗಗಳೂ ಇವೇ. ಇಂತಹ ಸಕಲವಿಧವಾದ ಸೇವಕಾರ್ಯವನ್ನು ಗೇರ್ಷೋನ್ಯರು ಮಾಡಬೇಕು.27ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರೂ, ಹೆಬ್ರೋನ್ ಗೋತ್ರದವರೂ, ಉಜ್ಜೀಯೇಲ್ ಗೋತ್ರದವರೂ ಇದ್ದರು.28ಅವರಲ್ಲಿ ದೇವಸ್ಥಾನವನ್ನು ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 8,600 ಮಂದಿ.29ಕೆಹಾತ್ಯರ ಗೋತ್ರಗಳವರು ದೇವದರ್ಶನದ ಗುಡಾರದ ದಕ್ಷಿಣ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.30ಕೆಹಾತ್ಯರ ಗೋತ್ರಗಳ ಪ್ರಧಾನಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.31ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು.32ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನಪುರುಷರ ಅಧ್ಯಕ್ಷನಾಗಿ ದೇವಸ್ಥಾನವನ್ನು ನೋಡಿಕೊಳ್ಳುವವರ ಮೇಲ್ವಿಚಾರಕನಾಗಿರಬೇಕು.33ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರೂ, ಮೂಷೀ ಗೋತ್ರದವರೂ ಇದ್ದರು.34ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 6,200 ಮಂದಿ.35ಮೆರಾರೀಯರ ಗೋತ್ರಗಳ ಪ್ರಧಾನಪುರುಷನು ಅಬೀಹೈಲನ ಮಗನಾದ ಚೂರೀಯೇಲ್. ಇವರು ದೇವದರ್ಶನದ ಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.36ಮೆರಾರೀ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುವೆಂದರೆ: ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, ಇವುಗಳ ಉಪಕರಣಗಳು,37ಅಂಗಳದ ಸುತ್ತಲಿರುವ ಕಂಬಗಳು, ಇವುಗಳ ಗದ್ದಿಗೆಕಲ್ಲುಗಳು, ಗೂಟಗಳು, ಹಗ್ಗಗಳು ಇವುಗಳೇ. ಇವುಗಳ ಸಕಲ ವಿಧವಾದ ಸೇವಕಾರ್ಯವನ್ನು ಇವರೇ ಮಾಡಬೇಕು.38ದೇವದರ್ಶನದ ಗುಡಾರದ ಪೂರ್ವ ದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ದಿಕ್ಕಿನಲ್ಲಿ ಮೋಶೆ, ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.39ಮೋಶೆ ಮತ್ತು ಆರೋನರು ಯೆಹೋವನ ಅಪ್ಪಣೆಯ ಮೇರೆಗೆ ಗೋತ್ರಗಳ ಪ್ರಕಾರ ಲೆಕ್ಕಿಸಿದ ಲೇವಿಯರ ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಒಟ್ಟು ಸಂಖ್ಯೆ 22,000 ಮಂದಿ.ಯೆಹೋವನು ಲೇವಿಯರನ್ನು ತನ್ನ ಸೇವೆಗೆ ಆಯ್ಕೆ ಮಾಡಿಕೊಂಡದ್ದು
40ಇದಲ್ಲದೆ ಯೆಹೋವನು ಮೋಶೆಗೆ, <<ನೀನು ಇಸ್ರಾಯೇಲರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಚೊಚ್ಚಲು ಗಂಡಸರನ್ನು ಹೆಸರು ಹಿಡಿದು ಎಣಿಕೆಮಾಡು.41ಇಸ್ರಾಯೇಲರಲ್ಲಿರುವ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಚೊಚ್ಚಲು ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ನಾನೇ ಯೆಹೋವನು>> ಎಂದನು.42ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು, ಇಸ್ರಾಯೇಲರಲ್ಲಿದ್ದ ಚೊಚ್ಚಲಾದವರನ್ನು ಲೆಕ್ಕಿಸಿದನು.43ಹೆಸರು ಹಿಡಿದು ಎಣಿಕೆ ಮಾಡಲ್ಪಟ್ಟ ಚೊಚ್ಚಲಾದವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 22,273 ಮಂದಿ.44ಪುನಃ ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,45<<ನೀನು ಇಸ್ರಾಯೇಲರ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನು, ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನೇ ಯೆಹೋವನು.46<<ಲೇವಿಯರ ಸಂಖ್ಯೆಗಿಂತ ಹೆಚ್ಚಾಗಿ 273 ಮಂದಿ ಚೊಚ್ಚಲರು ಹೆಚ್ಚಾಗಿ ಇಸ್ರಾಯೇಲರಲ್ಲಿ ಇರುವುದರಿಂದ ಅವರನ್ನು ಬಿಡಿಸುವುದಕ್ಕಾಗಿ ಒಬ್ಬೊಬ್ಬರಿಗೆ ಐದೈದು ಶೆಕೆಲ್ ಮೇರೆಗೆ ಈಡು ತೆಗೆದುಕೊಳ್ಳಬೇಕು.47ದೇವಸ್ಥಾನದ ಸೇವೆಗೆ ನೇಮಕವಾದ ಶೆಕೆಲ್ ಗಳ ಮೇರೆಯ ಪ್ರಕಾರ ಒಬ್ಬೊಬ್ಬನಿಗೆ ಐದು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಳ್ಳಬೇಕು.48ಅವರೊಳಗೆ ಹೆಚ್ಚಾಗಿರುವವರ ಬಿಡುಗಡೆಗೋಸ್ಕರ ಅವರು ಕೊಡುವ ಹಣವನ್ನು ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಡಬೇಕು>> ಎಂದನು.49ಅದಕ್ಕೆ ಅನುಸಾರವಾಗಿ ಮೋಶೆ ಲೇವಿಯರಿಗಿಂತ ಹೆಚ್ಚಾದ ಚೊಚ್ಚಲರನ್ನು ಬಿಡಿಸುವುದಕ್ಕಾಗಿ ಹಣವನ್ನು ತೆಗೆದುಕೊಂಡನು.50ಇಸ್ರಾಯೇಲರಲ್ಲಿ ಚೊಚ್ಚಲಾದವರಿಂದ ದೇವಸ್ಥಾನದ ಸೇವೆಗೆ ನೇಮಕವಾದ ರೂಪಾಯಿಯಲ್ಲಿ 1,365 ಶೆಕೆಲ್ ಗಳನ್ನು ತೆಗೆದುಕೊಂಡನು.51ಯೆಹೋವನ ಆಜ್ಞೆಯಂತೆ ಮೋಶೆ ಆ ಬಿಡುಗಡೆಯ ಹಣವನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಟ್ಟನು.
4ಕೆಹಾತ್ಯರಿಗೆ ಕೆಲಸಗಳನ್ನು ನೇಮಿಸಿದ್ದು
1ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದೇನೆಂದರೆ,2<<ನೀನು ಲೇವಿಯರೊಳಗೆ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.3ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರನ್ನು ಎಣಿಕೆಮಾಡು, ಅವರು ದೇವದರ್ಶನದ ಗುಡಾರದ ಸೇವೆ ಮಾಡಬೇಕು.4ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.5ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಆಜ್ಞಾಶಾಸನವನ್ನು ಮುಚ್ಚಿಬಿಟ್ಟು,6ಅದರ ಮೇಲೆ ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.7ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.8ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು.9ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂ10ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು.11ತರುವಾಯ ಅವರು ಬಂಗಾರದ ಯಜ್ಞವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು.12ದೇವಸ್ಥಾನದ ಸರ್ವ ಉಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು.13ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ಯಜ್ಞವೇದಿಯ ಮೇಲೆ ನೇರಳೆ ವರ್ಣದ ಬಟ್ಟೆಯನ್ನು ಹಾಸಿದರು.14ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.15ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.16ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.>>17ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,18<<ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿರಿ.19ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು.20ಕೆಹಾತ್ಯರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರೆಗಳನ್ನೂ ಅವರಿಗೆ ನೇಮಿಸಬೇಕು>> ಎಂದನು.ಗೇರ್ಷೋನ್ಯರಿಗೆ ಕೆಲಸಗಳನ್ನು ನೇಮಿಸಿದ್ದು
21ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,22<<ನೀನು ಗೇರ್ಷೋನ್ಯರ ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡಬೇಕು.23ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಎಣಿಕೆಮಾಡಬೇಕು.24ಸೇವಾಕಾರ್ಯ ಮಾಡುವುದರಲ್ಲಿಯೂ, ಹೊರೆಗಳನ್ನು ಹೊರುವುದರಲ್ಲಿಯೂ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಸೇವೆ ಯಾವುದೆಂದರೆ;25ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು ಅಂದರೆ ಗುಡಾರ, ಅದರ ಹೊದಿಕೆ, ಅದರ ಮೇಲಣ ಹಸನಾದ ಪ್ರಾಣಿಯ ತೊಗಲಿನ ಹೊದಿಕೆ,26ದೇವದರ್ಶನದ ಗುಡಾರದ ಬಾಗಿಲಿನ ಪರದೆ, ಗುಡಾರದ ಮತ್ತು ಯಜ್ಞವೇದಿಯ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆಗಳು, ಹಗ್ಗಗಳು, ಎಲ್ಲಾ ಉಪಕರಣಗಳು ಇವುಗಳನ್ನು ಹೊರಬೇಕು ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು.27ಗೇರ್ಷೋನ್ಯರು ಹೊರೆ ಹೊರುವುದರಲ್ಲಿಯೂ ಬೇರೆ ಸೇವಾಕಾರ್ಯ ಮಾಡುವುದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.28ದೇವದರ್ಶನದ ಗುಡಾರದ ವಿಷಯದಲ್ಲಿ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಅವರ ಮೇಲ್ವಿಚಾರಣೆ ಮಾಡಬೇಕು.ಮೆರಾರೀಯರಿಗೆ ಕೆಲಸಗಳನ್ನು ನೇಮಿಸಿದ್ದು
29<<ನೀನು ಮೆರಾರೀಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.30ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಲೆಕ್ಕಿಸಬೇಕು.31ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕೆಲಸ ಯಾವುದೆಂದರೆ: ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಅವುಗಳ ಗದ್ದಿಗೆಕಲ್ಲುಗಳನ್ನು,32ಅಂಗಳದ ಕಂಬಗಳನ್ನು, ಇವುಗಳ ಗದ್ದಿಗೆಕಲ್ಲುಗಳನ್ನೂ, ಗೂಟಗಳನ್ನೂ, ಹಗ್ಗಗಳನ್ನೂ ಎಲ್ಲಾ ಉಪಕರಣಗಳನ್ನೂ ಹೊರಬೇಕು; ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. ಅವರವರ ಜವಾಬ್ದಾರಿಗಳನ್ನೆಲ್ಲಾ ನೀವು ಹೆಸರು ಹೇಳಿ ಗೊತ್ತುಮಾಡಬೇಕು.33ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿದ್ದು ಕಾರ್ಯಗಳನ್ನು ಮಾಡಬೇಕು>> ಎಂದನು.ಲೇವಿ ಗೋತ್ರಕುಟುಂಬಗಳ ಲೆಕ್ಕ
34ಮೋಶೆ ಮತ್ತು ಆರೋನರೂ, ಸಮೂಹದ ಪ್ರಧಾನರೂ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.35ಅವರು ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಯೋಗ್ಯರಾದವರನ್ನು ಎಣಿಕೆಮಾಡಿದರು.36ಅವರಲ್ಲಿ ಗೋತ್ರಕುಟುಂಬಗಳ ಪ್ರಕಾರ ಎಣಿಕೆಯಾದವರು 2,750 ಮಂದಿ.37ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಕೆಹಾತ್ಯರ ಗೋತ್ರಕುಟುಂಬವನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.38ಗೇರ್ಷೋನ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.39ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರದವರನ್ನು ಎಣಿಕೆಮಾಡಿದರು.40ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ.41ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಮತ್ತು ಆರೋನರು ಗೇರ್ಷೋನ್ಯರ ಗೋತ್ರಕುಟುಂಬದವರನು ಎಣಿಕೆಮಾಡಿದಾಗ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.42ಮೆರಾರೀಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.43ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು.44ಗುಡಾರದ ಕೆಲಸಕ್ಕೆ ಸೇರಿದವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 3,200 ಮಂದಿ.45ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಮತ್ತು ಆರೋನರು ಮೆರಾರೀಯರ ಗೋತ್ರಕುಟುಂಬವನ್ನು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಎಂದು ಗೊತ್ತಾಯಿತು.46ಮೋಶೆ ಮತ್ತು ಆರೋನರೂ ಇಸ್ರಾಯೇಲರ ಪ್ರಧಾನರೂ ಲೇವಿಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.47ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. ದೇವದರ್ಶನದ ಗುಡಾರದ ಸೇವಕಾರ್ಯವನ್ನು ಮಾಡಲೂ, ಅದರ ಜವಾಬ್ದಾರಿಗಳನ್ನು ನಿರ್ವಹಿಸುವವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.48ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 8,580.49ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ, ಜವಾಬ್ದಾರಿಯೂ ನಿಗದಿಪಡಿಸಲಾಯಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು.
5ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂಬ ನಿಯಮ
1ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,2<<ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.3ಅಂಥವರು ಗಂಡಸರೇ ಆಗಲಿ ಅಥವಾ ಹೆಂಗಸರೇ ಆಗಲಿ, ಅವರೆಲ್ಲರನ್ನೂ ಪಾಳೆಯದಿಂದ ಹೊರಗೆಹಾಕಬೇಕು. ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.>>4ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಹಾಗೆಯೇ ಮಾಡಿದರು. ಇಸ್ರಾಯೇಲರು ಯೆಹೋವನಿಗೆ ವಿಧೇಯರಾಗಿ ಅಶುದ್ಧರಾದವರನ್ನೆಲ್ಲಾ ಪಾಳೆಯದಿಂದ ಹೊರಗೆ ಕಳುಹಿಸಿದರು.ಮೋಸದಿಂದ ಪಡೆದುದನ್ನು ಹಿಂತಿರುಗಿಸಬೇಕೆಂಬ ನಿಯಮ
5ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,6<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ,7ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಸೇರಿಸಿ ಕೊಡಬೇಕು.8<<ಆದರೆ ದಂಡವನ್ನು ತೆಗೆದುಕೊಳ್ಳುವವನು ಮೃತನಾಗಿ ಅವನ ಸಂಬಂಧಿಕರು ಯಾರೂ ಇಲ್ಲದಿದ್ದರೆ, ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಆ ದ್ರವ್ಯ ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತದ ಟಗರು ಈ ಎರಡೂ ಯಾಜಕನಿಗೆ ಸೇರಬೇಕು.9ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.10ಪ್ರತಿ ಮನುಷ್ಯನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಆ ಯಾಜಕನದ್ದಾಗಿರುತ್ತದೆ.>>ಅಪನಂಬಿಗಸ್ತ ಪತ್ನಿಯ ಪರಿಹಾರ
11ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,12<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: <ಯಾರ ಹೆಂಡತಿ ತಪ್ಪು ದಾರಿ ಹಿಡಿದು ಗಂಡನಿಗೆ ಅಪನಂಬಿಗಸ್ತಳಾಗಿ,13ಯಾರ ಕೈಗೆ ಸಿಕ್ಕದೆಯೂ ಸಾಕ್ಷಿ ಇಲ್ಲದೆಯೂ ರಹಸ್ಯವಾಗಿಯೇ ಪರಪುರುಷನೊಡನೆ ಸಂಗಮಿಸಿ ಗಂಡನಿಗೆ ದ್ರೋಹಿಯಾಗಿ ಅಶುದ್ಧಳಾದ ಸಂದರ್ಭದಲ್ಲಿ,14ಅಥವಾ ಅವಳು ಹಾಗೆ ಮಾಡದೆ ಅಶುದ್ಧಳಾಗದ ಸಂದರ್ಭದಲ್ಲಿಯೂ, ಆಕೆಯು ಕೆಟ್ಟುಹೋದಳೆಂಬ ಸಂಶಯ ಗಂಡನಿಗೆ ಬಂದರೆ,15ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.16<< <ಯಾಜಕನು ಅವಳನ್ನು ಕರೆದು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಬೇಕು.17ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.18ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸುಕನ್ನು ತೆಗೆದು, ಕೂದಲನ್ನು ಕೆದರಿಸಿ ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.19ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, <<ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೇ ನಿರಪರಾಧಿಯಾಗಿದ್ದರೆ ಶಪಿಸಲ್ಪಟ್ಟ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ.20ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಪರಪುರುಷನೊಡನೆ ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನೊಡನೆ ನೀನು ಸಂಗಮಿಸಿದ್ದರೆ,>>21<<ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ, ನಿನ್ನ ಹೊಟ್ಟೆಯು ಉಬ್ಬುವಂತೆ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳನ್ನಾಗಿ ನೇಮಿಸಲಿ.22ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.>> ಅದಕ್ಕೆ ಆ ಸ್ತ್ರೀಯು, <<ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ>> ಎಂದು ಹೇಳಬೇಕು.23<< <ಇದಲ್ಲದೆ ಯಾಜಕನು ಈ ಶಾಪವಚನಗಳನ್ನು ಸುರುಳಿಯಲ್ಲಿ ಬರೆದು, ವಿಷಕರ ಜಲದಲ್ಲಿ ಆ ಶಾಪವಚನವನ್ನು ತೊಳೆಯಬೇಕು.24ಶಾಪವನ್ನುಂಟುಮಾಡುವ ವಿಷಕರವಾದ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ವಿಷಕರವಾಗುವುದು.25ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ವ್ಯಭಿಚಾರದ ಸಂಶಯ ಸೂಚಕವಾದ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವನ ಸಮ್ಮುಖದಲ್ಲಿ ನೈವೇದ್ಯಮಾಡಿ ಯಜ್ಞವೇದಿಯ ಹತ್ತಿರ ತರಬೇಕು.26ಆಗ ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಕಾಣಿಕೆಯಿಂದ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಆ ನೀರನ್ನು ಸ್ತ್ರೀಗೆ ಕುಡಿಸಬೇಕು.27ಅವಳು ಅಶುದ್ಧಳಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಆ ನೀರನ್ನು ಕುಡಿದ ನಂತರ ಆ ನೀರು ಅವಳೊಳಗೆ ಸೇರಿ ವಿಷವಾಗುವುದರಿಂದ ಅವಳ ಹೊಟ್ಟೆ ಉಬ್ಬುವುದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು. ಆಗ ಆ ಸ್ತ್ರೀಯು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗುವಳು.28ಆದರೆ ಆ ಸ್ತ್ರೀಯು ಪರಿಶುದ್ಧಳಾಗಿ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನು ಅನುಭವಿಸದೆ ಸಂತಾನವನ್ನು ಪಡೆಯುವಳು.29ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾದರೆ ಇಂತಹ ವ್ಯಭಿಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ.30ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯ ಪಟ್ಟರೆ ಅವನು ಅವಳನ್ನು ಯೆಹೋವನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿನಿಯಮವನ್ನು ನೆರವೇರಿಸಬೇಕು.31ಆಗ ಗಂಡನು ನಿರಪರಾಧಿಯಾಗುವನು. ಆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.> >>
6ನಾಜೀರನ ವ್ರತ ನಿಯಮ
1ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,2<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,3ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು.4ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಲತೆಯಿಂದ ಬೆಳೆದ ಬೀಜವನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು.5<<ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.6ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳಲ್ಲಿ ಯಾವ ಶವವನ್ನೂ ಮುಟ್ಟಬಾರದು.7ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.8ತಾನು ಪ್ರತಿಷ್ಠಿಸಿಕೊಂಡಿರುವ ದಿನಗಳೆಲ್ಲೆಲ್ಲಾ ಅವನು ಯೆಹೋವನಿಗೆ ಮೀಸಲಾಗಿಯೇ ಇರಬೇಕು.9ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.10ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.11ಯಾಜಕನು ಒಂದನ್ನು ದೋಷಪರಿಹಾರ ಯಜ್ಞವಾಗಿ, ಇನ್ನೊಂದನ್ನು ಸರ್ವಾಂಗಹೋಮವಾಗಿ ಸಮರ್ಪಿಸಿ ಶವಸೋಂಕಿದವನಿಗಾಗಿ ದೋಷಪರಿಹಾರ ಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು.12ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.13ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು.14ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದಟಗರನ್ನು ಹಾಗು ತರಬೇಕು.15ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.16ಯಾಜಕನು ಇವುಗಳನ್ನು ಯೆಹೋವನ ಸನ್ನಿಧಿಗೆ ತಂದು ನಾಜೀರನ ದೋಷಪರಿಹಾರಕ ಯಜ್ಞವನ್ನೂ ಮತ್ತು ಸರ್ವಾಂಗಹೋಮವನ್ನೂ ಸಮರ್ಪಿಸಬೇಕು.17ಆ ಟಗರನ್ನೂ, ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ, ಯಾಜಕನು ಯೆಹೋವನಿಗೆ ಸಮಾಧಾನಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು.18ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.19ತರುವಾಯ ಯಾಜಕನು ಆ ಟಗರಿನ ಬೇಯಿಸಿದ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು.20ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.21ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.>>ಆಶೀರ್ವಾದ ವಚನ
22ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,23<<ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, <ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,24ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ;25ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ;26ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ> ಎಂಬುದೇ.27ಹೀಗೆ ಅವರು ಇಸ್ರಾಯೇಲರನ್ನು ಕುರಿತು ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.>>
7ಗುಡಾರದ ಪ್ರತಿಷ್ಠೆಗೆ ಕೊಟ್ಟ ಕಾಣಿಕೆಯ ವಿವರ
1ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ, ಅದರ ಸಾಮಾನುಗಳನ್ನೂ, ಯಜ್ಞವೇದಿಯನ್ನೂ ಮತ್ತು ಯಜ್ಞವೇದಿಯ ಉಪಕರಣಗಳನ್ನೂ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು.2ಆ ದಿನದಲ್ಲಿ ಇಸ್ರಾಯೇಲರ ಪ್ರಧಾನ ಪುರುಷರು ಅಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು, ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.3ಅವರು ಆರು ಕಮಾನು ಬಂಡಿಯನ್ನೂ ಮತ್ತು ಹನ್ನೆರಡು ಎತ್ತುಗಳನ್ನೂ ಯೆಹೋವನ ಸನ್ನಿಧಿಗೆ ಕಾಣಿಕೆಯಾಗಿ ತಂದರು. ನಾಯಕರಾದ ಇಬ್ಬರಿಬ್ಬರೂ ಒಂದು ಕಮಾನು ಬಂಡಿಯನ್ನೂ, ಪ್ರತಿ ನಾಯಕನು ಒಂದು ಜೋಡಿ ಎತ್ತನ್ನೂ, ದೇವದರ್ಶನ ಗುಡಾರದ ಮುಂದೆ ತಂದರು. ಹೀಗೆ ಆರು ಜೊತೆ ಬಂಡಿ ಆರು ಜೊತೆ ಎತ್ತುಗಳನ್ನು ತಂದು ಅರ್ಪಿಸಿದರು.4ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,5<<ನೀನು ಇವರ ಕೈಯಿಂದ ಈ ಕಾಣಿಕೆಯ ವಸ್ತುಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಸೇವೆಗಾಗಿ ಉಪಯೋಗಿಸು. ಕಾಣಿಕೆಯನ್ನು ಲೇವಿಯರಿಗೆ ಅವರವರ ಕೆಲಸಕ್ಕೆ ತಕ್ಕ ಹಾಗೆ ಕೊಡಬೇಕು>> ಎಂದು ಆಜ್ಞಾಪಿಸಿದನು.6ಮೋಶೆ ಆ ಬಂಡಿಗಳನ್ನೂ ಮತ್ತು ಎತ್ತುಗಳನ್ನೂ ತೆಗೆದುಕೊಂಡು ಲೇವಿಯರಿಗೆ ಕೊಟ್ಟನು.7ಅವನು ಗೇರ್ಷೋನ್ಯ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ಎರಡು ಬಂಡಿಗಳನ್ನು, ಮತ್ತು ಎರಡು ಜೋಡಿ ಎತ್ತುಗಳನ್ನು ಕೊಟ್ಟನು.8ಮೆರಾರೀ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ನಾಲ್ಕು ಬಂಡಿಗಳನ್ನು ಮತ್ತು ನಾಲ್ಕು ಜೋಡಿ ಎತ್ತುಗಳನ್ನು ಮಹಾಯಾಜಕನಾದ ಆರೋನನ ಮಗನಾದ ಈತಾಮಾರನ ಕೈಗೆ ಒಪ್ಪಿಸಿದರು.9ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.10ಮೋಶೆಯು ಯಜ್ಞವೇದಿಯನ್ನು ಅಭಿಷೇಕಿಸಿದ ದಿನದಲ್ಲಿ, ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.11ಆಗ ಯೆಹೋವನು ಮೋಶೆಗೆ, <<ಒಬ್ಬೊಬ್ಬ ಕುಲಾಧಿಪತಿಯು ತನಗೆ ನೇಮಕವಾದ ದಿನದಲ್ಲಿ ಯಜ್ಞವೇದಿಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಬೇಕು>> ಎಂದು ಆಜ್ಞಾಪಿಸಿದನು.12ಮೊದಲನೆಯ ದಿನದಲ್ಲಿ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಕುಲಾಧಿಪತಿಯಾದ ಅಮ್ಮೀನಾದಾಬನ ಮಗನಾದ ನಹಶೋನ.13ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ [ತೊಲೆ] ತೂಕದ ಬೆಳ್ಳಿಯ ಒಂದು ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.14ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.15ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕೊಟ್ಟನು.16ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,17ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು, ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀನಾದಾಬನ ಮಗನಾದ ನಹಶೋನನು ಸಮರ್ಪಿಸಿದ ಕಾಣಿಕೆಗಳು ಇವೇ.18ಎರಡನೆಯ ದಿನದಲ್ಲಿ ಇಸ್ಸಾಕಾರ್ ಕುಲಾಧಿಪತಿಯೂ ಚೂವಾರನ ಮಗನೂ ಆದ ನೆತನೇಲನು ಕಾಣಿಕೆಯನ್ನು ಸಮರ್ಪಿಸಿದನು.19ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯು; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.20ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.21ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.22ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,23ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಚೂವಾರನ ಮಗನಾದ ನೆತನೇಲನು ಸಮರ್ಪಿಸಿದ ಕಾಣಿಕೆಗಳು ಇವೇ.24ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿಯೂ, ಹೇಲೋನನ ಮಗನೂ ಆದ ಎಲೀಯಾಬನು ಕಾಣಿಕೆಯನ್ನು ಸಮರ್ಪಿಸಿದನು.25ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;26ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.27ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.28ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,29ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಹೇಲೋನನ ಮಗನಾದ ಎಲೀಯಾಬನು ಸಮರ್ಪಿಸಿದ ಕಾಣಿಕೆಗಳು ಇವೇ.30ನಾಲ್ಕನೆಯ ದಿನದಲ್ಲಿ ರೂಬೇನ್ ಕುಲಾಧಿಪತಿಯೂ, ಶೆದೇಯೂರನ ಮಗನೂ ಆದ ಎಲೀಚೂರನು ಕಾಣಿಕೆಯನ್ನು ಸಮರ್ಪಿಸಿದನು.31ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.32ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.33ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.34ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,35ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಶೆದೇಯೂರನ ಮಗನಾದ ಎಲೀಚೂರನು ಸಮರ್ಪಿಸಿದ ಕಾಣಿಕೆಗಳು ಇವೇ.36ಐದನೆಯ ದಿನದಲ್ಲಿ ಸಿಮೆಯೋನ್ ಕುಲಾಧಿಪತಿಯೂ, ಚೂರೀಷದ್ದೈಯ ಮಗನೂ ಆದ ಶೆಲುಮೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.37ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.38ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿ ಸಮರ್ಪಿಸಿದನು.39ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.40ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,41ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಚೂರೀಷದ್ದೈಯ ಮಗನಾದ ಶೆಲುಮೀಯೇಲನು ಸಮರ್ಪಿಸಿದ ಕಾಣಿಕೆಗಳು ಇವೇ.42ಆರನೆಯ ದಿನದಲ್ಲಿ ಗಾದ್ ಕುಲಾಧಿಪತಿಯೂ, ದೆಗೂವೇಲನ ಮಗನೂ ಆದ ಎಲ್ಯಾಸಾಫನು ಕಾಣಿಕೆಯನ್ನು ಸಮರ್ಪಿಸಿದನು.43ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.44ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.45ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.46ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,47ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು, ದೆಗೂವೇಲನ ಮಗನಾದ ಎಲ್ಯಾಸಾಫನು ಸಮರ್ಪಿಸಿದ ಕಾಣಿಕೆಗಳು ಇವೇ.48ಏಳನೆಯ ದಿನದಲ್ಲಿ ಎಫ್ರಾಯೀಮ್ ಕುಲಾಧಿಪತಿಯೂ, ಅಮ್ಮೀಹೂದನ ಮಗನೂ ಆದ ಎಲೀಷಾಮನು ಕಾಣಿಕೆಯನ್ನು ಸಮರ್ಪಿಸಿದನು.49ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.50ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.51ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.52ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,53ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀಹೂದನ ಮಗನಾದ ಎಲೀಷಾಮನು ಸಮರ್ಪಿಸಿದ ಕಾಣಿಕೆಗಳು ಇವೇ.54ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿಯೂ, ಪೆದಾಚೂರನ ಮಗನೂ ಆದ ಗಮ್ಲೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.55ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.56ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.57ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.58ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,59ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು.60ಒಂಭತ್ತನೆಯ ದಿನದಲ್ಲಿ ಬೆನ್ಯಾಮೀನ್ ಕುಲಾಧಿಪತಿಯೂ ಗಿದ್ಯೋನಿಯ ಮಗನೂ ಆದ ಅಬೀದಾನನು ಕಾಣಿಕೆಯನ್ನು ಸಮರ್ಪಿಸಿದನು.61ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.62ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.63ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.64ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,65ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಗಿದ್ಯೋನಿಯ ಮಗನಾದ ಅಬೀದಾನನು ಕಾಣಿಕೆಯಾಗಿ ಸಮರ್ಪಿಸಿದ ಕಾಣಿಕೆಗಳು ಇವೇ.66ಹತ್ತನೆಯ ದಿನದಲ್ಲಿ ದಾನ್ ಕುಲಾಧಿಪತಿಯೂ ಅಮ್ಮೀಷದ್ದೈಯ ಮಗನೂ ಆದ ಅಹೀಗೆಜೆರನು ಕಾಣಿಕೆಯನ್ನು ಸಮರ್ಪಿಸಿದನು.67ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.68ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.69ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.70ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,71ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು ಸಮರ್ಪಿಸಿದ ಕಾಣಿಕೆಗಳು ಇವೇ.72ಹನ್ನೊಂದನೆಯ ದಿನದಲ್ಲಿ ಆಶೇರ್ ಕುಲಾಧಿಪತಿಯೂ ಒಕ್ರಾನನ ಮಗನೂ ಆದ ಪಗೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.73ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆಯೂ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.74ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.75ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.76ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,77ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು.78ಹನ್ನೆರಡನೆಯ ದಿನದಲ್ಲಿ ನಫ್ತಾಲಿ ಕುಲಾಧಿಪತಿಯೂ ಏನಾನನ ಮಗನೂ ಆದ ಅಹೀರನು ಕಾಣಿಕೆಯನ್ನು ಸಮರ್ಪಿಸಿದನು.79ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.80ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.81ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.82ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,83ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು.84ಯಜ್ಞವೇದಿ ಅಭಿಷೇಕಿಸಲ್ಪಟ್ಟ ದಿನದಲ್ಲಿ ಇಸ್ರಾಯೇಲರ ಕುಲಾಧಿಪತಿಗಳು, ಅದರ ಪ್ರತಿಷ್ಠೆಗಾಗಿ ಕೊಟ್ಟ ಕಾಣಿಕೆಗಳು ಒಟ್ಟಾಗಿ 12 ಬೆಳ್ಳಿಯ ತಟ್ಟೆಗಳು, 12 ಬೆಳ್ಳಿಯ ಬಟ್ಟಲುಗಳು, 12 ಚಿನ್ನದ ಧೂಪಾರತಿಗಳು.85ಒಂದೊಂದು ಬೆಳ್ಳಿಯ ತಟ್ಟೆಯು 120 ಶೆಕೆಲ್ ತೂಕವುಳ್ಳದ್ದು, ಒಂದೊಂದು ಬಟ್ಟಲು 70 ಶೆಕೆಲ್ ತೂಕದ್ದು. ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯ ತೂಕದ ಪ್ರಕಾರ 2,400 ಶೆಕೆಲ್.86ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವಸ್ಥಾನದ ನಾಣ್ಯ ತೂಕದ ಪ್ರಕಾರ ಹತ್ತು ಶೆಕೆಲ್ ಮೇರೆಗೆ ಇರುವುದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ಶೆಕೆಲ್.87ಸರ್ವಾಂಗಹೋಮಕ್ಕಾಗಿ ಕೊಟ್ಟ ಒಟ್ಟು ಪಶುಗಳು: 12 ಹೋರಿಗಳು, 12 ಟಗರುಗಳು, ಒಂದು ವರ್ಷದ 12 ಕುರಿಗಳು ಇವುಗಳೊಂದಿಗೆ ಸಮರ್ಪಿಸಬೇಕಾದ ಧಾನ್ಯದ್ರವ್ಯವನ್ನೂ ಕೊಟ್ಟರು. ದೋಷಪರಿಹಾರಕ ಯಜ್ಞಕ್ಕಾಗಿ ಕೊಟ್ಟದ್ದು 12 ಹೋತಗಳು.88ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ.89ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು.
8ದೇವಸ್ಥಾನದಲ್ಲಿನ ದೀಪಗಳನ್ನು ಹಚ್ಚುವ ಕ್ರಮ
1ಯೆಹೋವನು ಮೋಶೆಯ ಸಂಗಡ ಮಾತನಾಡಿ, ಹೇಳಿದ್ದೇನೆಂದರೆ:2<<ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು>> ಎಂದು ಹೇಳಿದನು.3ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಆ ದೀಪಗಳನ್ನು ಕ್ರಮವಾಗಿ ಇಟ್ಟನು.4ದೀಪಸ್ತಂಭವೂ, ಅದರ ಬುಡದ ಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದನು.ಲೇವಿಯರನ್ನು ಶುದ್ಧೀಕರಿಸಿ ಉದ್ಯೋಗಕ್ಕೆ ಸೇರಿಸಿದ್ದು
5ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,6<<ನೀನು ಇಸ್ರಾಯೇಲರಿಂದ ಲೇವಿಯರನ್ನು ಪ್ರತ್ಯೇಕಿಸಿ ಶುದ್ಧೀಕರಿಸಿಬೇಕು.7ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ ಕ್ಷೌರಮಾಡಿಸಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.8ತರುವಾಯ ಅವರು ಸರ್ವಾಂಗಹೊಮಕ್ಕಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯ ಅಂದರೆ ಎಣ್ಣೆ ಬೆರೆಸಿದ ಗೋದಿಯ ಹಿಟ್ಟನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಹೋರಿಯನ್ನು ತೆಗೆದುಕೊಳ್ಳಬೇಕು.9ಆಗ ನೀನು ಲೇವಿಯರನ್ನು ದೇವದರ್ಶನ ಗುಡಾರದ ಮುಂದೆ ಕರೆದುಕೊಂಡು ಬಂದು ಇಸ್ರಾಯೇಲರ ಸಮೂಹವನ್ನೆಲ್ಲಾ ಕೂಡಿಸಬೇಕು.10ಲೇವಿಯರನ್ನು ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.11ಲೇವಿಯರು ಯೆಹೋವನ ಸೇವಾಕಾರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲರ ನಿಮಿತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.12<<ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ನಂತರ ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ, ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಬೇಕು. ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.13ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು ನಿಲ್ಲಿಸಿ ಅವರನ್ನು ನೈವೇದ್ಯದಂತೆ ಯೆಹೋವನಿಗೆ ಸಮರ್ಪಿಸಬೇಕು.14ಹೀಗೆ ನೀನು ಲೇವಿಯರನ್ನು ಇಸ್ರಾಯೇಲರಿಂದ ಪ್ರತ್ಯೇಕಿಸಿದಾಗ ಅವರು ನನ್ನ ಸೊತ್ತಾಗುವರು.15<<ಅದಾದ ನಂತರ ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಬೇಕು.16ಇಸ್ರಾಯೇಲರಲ್ಲಿ ಇವರು ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಇಸ್ರಾಯೇಲರಲ್ಲಿ ಚೊಚ್ಚಲ ಮಕ್ಕಳಿಗೆ ಬದಲಾಗಿ ನಾನು ಲೇವಿಯರನ್ನು ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.17ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರೂ ಪಶುಗಳೂ ಎಲ್ಲಾ ನನ್ನ ಸ್ವಂತ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದುದನ್ನು ನಾನು ಸಂಹರಿಸಿದಾಗ ಇಸ್ರಾಯೇಲರ ಚೊಚ್ಚಲಾದುದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನು.18ನಾನು ಇಸ್ರಾಯೇಲರ ಚೊಚ್ಚಲಮಕ್ಕಳಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ.19ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.>>20ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ, ಆರೋನರೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು.21ಲೇವಿಯರು ತಮ್ಮನ್ನು ಶುದ್ಧಪಡಿಸಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ, ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.22ಆ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ಆರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.23ಪುನಃ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,24<<ಲೇವಿಯರು ಅನುಸರಿಸಬೇಕಾದ ಪದ್ಧತಿ ಏನೆಂದರೆ: ಇಪ್ಪತ್ತೈದು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರು ದೇವದರ್ಶನ ಗುಡಾರದ ಸೇವಮಂಡಳಿಗೆ ಸೇರಬೇಕು.25ಅವರು ಐವತ್ತು ವರ್ಷದವರಾದ ನಂತರ ಆ ಮಂಡಳಿಯನ್ನು ಬಿಟ್ಟು ದೇವಾಲಯದ ಸೇವಾಕಾರ್ಯದಿಂದ ಬಿಡುಗಡೆಯಾಗುವರು.26ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನ ಗುಡಾರವನ್ನು ಕಾಯುವ ಸೇವೆಯನ್ನು ಮಾಡಬಹುದೇ ಹೊರತು ಅವರಿಂದ ಬೇರೆ ಸೇವಾಕಾರ್ಯವನ್ನು ಮಾಡಿಸಬಾರದು. ಲೇವಿಯರು ಕಾಪಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ಅವರಿಗೆ ನೇಮಿಸಬೇಕು.>>
9ಇಸ್ರಾಯೇಲರು ಎರಡನೆಯ ಪಸ್ಕ ಹಬ್ಬವನ್ನು ಆಚರಿಸಿದ್ದು
1ಇಸ್ರಾಯೇಲರು ಐಗುಪ್ತ ದೇಶವನ್ನು ಬಿಟ್ಟುಬಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ, ಸೀನಾಯಿ ಅರಣ್ಯದಲ್ಲಿ ಯೆಹೋವನು ಮೋಶೆಗೆ,2<<ಇಸ್ರಾಯೇಲರು ಪಸ್ಕಹಬ್ಬ ಆಚರಿಸಲು ನೇಮಕವಾದ ಕಾಲದಲ್ಲಿ ಆಚರಿಸಲು ಹೇಳು.3ನಾನು ನೇಮಿಸಿದ ಆಜ್ಞಾವಿಧಿಗಳ ಪ್ರಕಾರ ನೇಮಕವಾದ ಕಾಲದಲ್ಲಿಯೇ ಅಂದರೆ ಈ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ನೀವು ಅದನ್ನು ಆಚರಿಸಬೇಕು>> ಎಂದು ಹೇಳಿದನು.4ಆದಕಾರಣ ಮೋಶೆ ಇಸ್ರಾಯೇಲರಿಗೆ, ನೀವು ಪಸ್ಕಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಿದನು.5ಹಾಗೆಯೇ ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಪಸ್ಕಹಬ್ಬವನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಎಲ್ಲವನ್ನು ಇಸ್ರಾಯೇಲರು ಮಾಡಿದರು.6ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು.7ಈ ಜನರು ಮೋಶೆಗೆ <<ಮನುಷ್ಯನ ಶವಸೋಂಕಿದರಿಂದ ನಾವು ಅಶುದ್ಧರಾದೆವು. ನಾವು ಉಳಿದ ಇಸ್ರಾಯೇಲರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವುದಕ್ಕೆ ಅಪ್ಪಣೆಯಿಲ್ಲವೋ?>> ಎಂದು ಕೇಳಿದರು.8ಅದಕ್ಕೆ ಮೋಶೆ ಅವರಿಗೆ, <<ಸ್ವಲ್ಪ ಕಾದುಕೊಂಡಿರಿ. ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ>> ಎಂದು ಹೇಳಿದನು.9ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,10<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.>11ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು.12ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಂತೂ ಪಸ್ಕಹಬ್ಬದ ವಿಷಯವಾಗಿರುವ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.13ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.14<<ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ನಿಯಮವಿರಬೇಕು.>>ಇಸ್ರಾಯೇಲರಿಗೆ ಮೇಘಸ್ತಂಭದ ಸೂಚನೆ
15ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು.16ನಿತ್ಯವೂ ಹಾಗೆಯೇ ಕಾಣಿಸುತ್ತಿತ್ತು; ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುತ್ತಿತ್ತು.17ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲರು ಮುಂದಕ್ಕೆ ಪ್ರಯಾಣಮಾಡುತ್ತಿದ್ದರು. ಆ ಮೇಘವು ಎಲ್ಲಿ ನಿಲ್ಲುವುದೋ ಅಲ್ಲಿ ಇಸ್ರಾಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.18ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರು ಪ್ರಯಾಣಮಾಡುತ್ತಿದ್ದರು, ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು.19ಆ ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವಾಗ ಇಸ್ರಾಯೇಲರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.20ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿನಗಳು ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳಿದುಕೊಳ್ಳುತ್ತಿದ್ದರು. ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು.21ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಬೆಳಗ್ಗಿನವರೆಗೆ ಇರುತ್ತಿತ್ತು. ಬೆಳಗ್ಗೆ ಅದು ಮೇಲಕ್ಕೆ ಏಳುವಾಗ ಜನರು ಪ್ರಯಾಣಮಾಡುತ್ತಿದ್ದರು. ಕೆಲವು ಸಮಯಗಳಲ್ಲಿ ಅದು ಹಗಲಿರುಳು ನಿಂತಿರುತ್ತಿತ್ತು. ಅದು ಯಾವಾಗ ಮೇಲೇಳುತ್ತಿತ್ತೋ ಆಗ ಜನರು ಹೊರಡುತ್ತಿದ್ದರು.22ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವುದು ಎರಡು ದಿನವಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಅಲ್ಲಿಯ ತನಕ ಇಸ್ರಾಯೇಲರು ಪ್ರಯಾಣಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಮೇಘವು ಏಳುವಾಗ ಅವರು ಹೊರಡುತ್ತಿದ್ದರು.23ಯೆಹೋವನ ಆಜ್ಞೆಯ ಪ್ರಕಾರ ಅವರು ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಯೆಹೋವನ ಆಜ್ಞೆಯ ಪ್ರಕಾರವೇ ಅವರು ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.
10ದೇವಸ್ಥಾನದ ಬೆಳ್ಳಿಯ ತುತ್ತೂರಿಗಳು
1ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,2<<ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.3ನೀನು ತುತ್ತೂರಿಗಳನ್ನು ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.4ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.5ನೀನು ಆರ್ಭಟವಾಗಿ ಊದಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು.6ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.7ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬಾರದು.8<<ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.9ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.10ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.>>ಇಸ್ರಾಯೇಲ್ಯರು ಸೀನಾಯಿ ಅರಣ್ಯವನ್ನು ಬಿಟ್ಟುಹೊರಟ್ಟಿದ್ದು
11ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.12ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.13ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ರೀತಿಯಲ್ಲಿ ಅವರು ಪ್ರಯಾಣಮಾಡಿದ್ದು ಇದೇ ಮೊದಲನೆಯ ಸಾರಿ.14ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.15ಇಸ್ಸಾಕಾರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂವಾರನ ಮಗನಾದ ನೆತನೇಲನು.16ಜೆಬುಲೂನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಹೇಲೋನನ ಮಗನಾದ ಎಲೀಯಾಬನು.17ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರು ಮತ್ತು ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.18ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಶೆದೇಯೂರನ ಮಗನಾದ ಎಲೀಚೂರನು.19ಸಿಮೆಯೋನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂರೀಷದ್ದೈಯ ಮಗನಾದ ಶೆಲುಮೀಯೇಲನು.20ಗಾದ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ದೆಗೂವೇಲನ ಮಗನಾದ ಎಲ್ಯಾಸಾಫನು.21ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.22ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.23ಮನಸ್ಸೆ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಪೆದಾಚೂರನ ಮಗನಾದ ಗಮ್ಲೀಯೇಲನು.24ಬೆನ್ಯಾಮೀನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಗಿದ್ಯೋನಿಯ ಮಗನಾದ ಅಬೀದಾನನು.25ಆ ಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನಾಗಿ ಇದ್ದವನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.26ಆಶೇರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಒಕ್ರಾನನ ಮಗನಾದ ಪಗೀಯೇಲನು.27ನಫ್ತಾಲಿ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಏನಾನನ ಮಗನಾದ ಅಹೀರನು.28ಈ ರೀತಿಯಲ್ಲಿ ಇಸ್ರಾಯೇಲರು ಸೈನ್ಯಸೈನ್ಯವಾಗಿ ಹೊರಟು ಪ್ರಯಾಣಮಾಡಿದರು.ಯೆಹೋವನ ಮಂಜೂಷವು ಮುಂದಾಗಿ ಹೋದದ್ದು
29ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, <<ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು>> ಎಂದು ಹೇಳಿದನು.30ಆದರೆ ಹೋಬಾಬನು ಮೋಶೆಗೆ, <<ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ>> ಎಂದು ಹೇಳಿದನು.31ಅದಕ್ಕೆ ಮೋಶೆಯು ಉತ್ತರವಾಗಿ, <<ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ಗೊತ್ತಿದೆ. ಆದುದರಿಂದ ನೀನು ನಮಗೆ ಕಣ್ಣಾಗಿರಬೇಕು.32ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು>> ಎಂದು ಹೇಳಿದನು.33ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.34ಅವರು ಪಾಳೆಯದಿಂದ ಹೊರಡುವಾಗ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಅವರ ಮೇಲೆ ಇರುತ್ತಿತ್ತು.35ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ,<<ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ>> ಎಂದು ಹೇಳುವನು.
36ಅದು ನಿಂತಾಗ ಅವನು,<<ಯೆಹೋವನೇ, ಇಸ್ರಾಯೇಲರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ಮರಳಿ ಆಗಮಿಸು>> ಎಂದು ಹೇಳುವನು.
11ತಬೇರದಲ್ಲಿ ಕಾಣಿಸಿಕೊಂಡ ಬೆಂಕಿ
1ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.2ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಆರಿಹೋಯಿತು.3ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದುದರಿಂದ ಆ ಸ್ಥಳಕ್ಕೆ << ತಬೇರ>> ಎಂದು ಹೆಸರಾಯಿತು.ಎಪ್ಪತ್ತುಮಂದಿ ಮುಖ್ಯಸ್ಥರ ಆಯ್ಕೆ
4ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, <<ಮಾಂಸವು ನಮಗೆ ಹೇಗೆ ಸಿಕ್ಕೀತು?5ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.6ಇಲ್ಲಿಯಾದರೋ ನಾವು ಬಲಹೀನರಾಗಿದ್ದೇವೆ. ಈ ಮನ್ನವೇ ಹೊರತು ನಮಗೆ ಇನ್ನೇನೂ ತಿನ್ನುವುದಕ್ಕೆ ಸಿಕ್ಕುವುದಿಲ್ಲ>> ಎಂದು ನಿಷ್ಠುರವಾಗಿ ಮಾತನಾಡ ತೊಡಗಿದರು.7ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸುತ್ತಿತ್ತು.8ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.9ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.10ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು.11ಆಗ ಮೋಶೆ ಯೆಹೋವನಿಗೆ, <<ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ?12ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?13ಇವರು ನನ್ನ ಬಳಿಗೆ ಅಳುತ್ತಾ ಬಂದು, <ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು> ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?14ಇಷ್ಟು ಜನರ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ.15ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ>> ಎಂದನು.16ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, <<ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.17ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.>>18ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, <<ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, <ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ> ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.19ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ.20ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, <ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ> ಎಂದು ಹೇಳು>> ಎಂದನು.21ಅದಕ್ಕೆ ಮೋಶೆ, <<ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು, ಆದರೂ ನೀನು, <ಇವರಿಗೆ ಒಂದು ತಿಂಗಳು ಪೂರ್ತಿಯಾಗಿ ಮಾಂಸವನ್ನು ತಿನ್ನಲು ಕೊಡುತ್ತೇನೆ> ಎಂದು ಹೇಳಿದ್ದೀ.22ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಹಿಂಡಿನಿಂದ ಆಡು, ಕುರಿ, ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಳ್ಳಬೇಕೋ?>> ಎಂದು ಕೇಳಿದನು.23ಯೆಹೋವನು ಮೋಶೆಗೆ, <<ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ>> ಎಂದು ಹೇಳಿದನು.24ಮೋಶೆ ಹೊರಟುಹೋಗಿ ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.25ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.26ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.27ಪಾಳೆಯದಿಂದ ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿ ಬಂದು, <<ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆ>> ಎಂದು ತಿಳಿಸಿದನು.28ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, <<ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು>> ಎಂದು ಹೇಳಿದನು.29ಅದಕ್ಕೆ ಮೋಶೆ, <<ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು>> ಎಂದನು.30ತರುವಾಯ ಮೋಶೆಯೂ ಮತ್ತು ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.ದೇವರು ಲಾವಕ್ಕಿಗಳನ್ನು ಕಳುಹಿಸಿದ್ದು
31ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು.32ಇಸ್ರಾಯೇಲರು ಆ ದಿನವೆಲ್ಲಾ, ರಾತ್ರಿಯೆಲ್ಲಾ, ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಯಾರು ಹತ್ತು ಹೋಮೆರಿಗಿಂತ ಕಡಿಮೆ ಕೂಡಿಸಿಕೊಳ್ಳಲಿಲ್ಲ. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.33ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗೆಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.34ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ << ಕಿಬ್ರೋತ್ ಹತಾವಾ>> ಎಂದು ಹೆಸರಾಯಿತು.35ತರುವಾಯ ಜನರು ಕಿಬ್ರೋತ್ ಹತಾವದಿಂದ ಪ್ರಯಾಣಮಾಡಿ ಹಚೇರೋತಿಗೆ ಬಂದು ಅಲ್ಲಿ ಇಳಿದುಕೊಂಡರು.
12ಮಿರ್ಯಾಮಳಿಗೆ ಉಂಟಾದ ತೊನ್ನು
1ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಆ ಕಾರಣಕ್ಕಾಗಿ ಮಿರ್ಯಾಮಳೂ ಹಾಗೂ ಆರೋನನೂ ಅವನಿಗೆ ವಿರುದ್ಧವಾಗಿ ಮಾತನಾಡಿದರು.2ಅವರು, <<ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?>> ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು.3ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು.4ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ, ಆರೋನ್ ಮತ್ತು ಮಿರ್ಯಾಮರಿಗೆ, <<ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕು>> ಎಂದು ಆಜ್ಞಾಪಿಸಿದನು. ಆಗ ಆ ಮೂವರು ಹೊರಗೆ ಬಂದರು.5ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು.6ಯೆಹೋವನು ಅವರಿಗೆ, <<ನನ್ನ ಮಾತನ್ನು ಕೇಳಿರಿ.ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ
ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು,
ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.
7ನನ್ನ ಸೇವಕನಾದ ಮೋಶೆಯು ಅಂಥವನಲ್ಲ.ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.
8ನಾನು ಅವನ ಸಂಗಡ ಗುಪ್ತವಾಗಿ ಅಲ್ಲ,ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ.
ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು.
ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?>> ಎಂದನು.
9ನಂತರ ಯೆಹೋವನು ಅವರ ಮೇಲೆ ಕೋಪಗೊಂಡು ಹೊರಟುಹೋದನು.10ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು.11ಆಗ ಆರೋನನು ಮೋಶೆಗೆ, <<ನನ್ನ ಒಡೆಯನೇ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದೆವು. ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.12ಅರ್ಧ ಮಾಂಸ ಕೊಳೆತುಹೋಗಿ ಹುಟ್ಟಿದ ಶಿಶುವಿನಂತೆ ಈಕೆ ಆಗಬಾರದು>> ಎಂದು ಬೇಡಿದನು.13ಆಗ ಮೋಶೆ ಯೆಹೋವನಿಗೆ, <<ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ>> ಎಂದು ಮೊರೆಯಿಟ್ಟನು.14ಅದಕ್ಕೆ ಯೆಹೋವನು ಮೋಶೆಗೆ, <<ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು>> ಎಂದು ಉತ್ತರಕೊಟ್ಟನು.15ಹಾಗೆಯೇ ಮಿರ್ಯಾಮಳು ಏಳು ದಿನಗಳವರೆಗೆ ಪಾಳೆಯದ ಹೊರಗೆ ಇರಬೇಕಾಯಿತು. ಆಕೆಯನ್ನು ತಿರುಗಿ ಸೇರಿಸಿಕೊಳ್ಳುವ ವರೆಗೆ ಇಸ್ರಾಯೇಲರು ಪ್ರಯಾಣಮಾಡಲಿಲ್ಲ.16ತರುವಾಯ ಅವರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳಿದುಕೊಂಡರು. 13ಗೂಢಚಾರರನ್ನು ಕಾನಾನ್ ದೇಶಕ್ಕೆ ಕಳುಹಿಸಿದ್ದು
1ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,2<<ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ನೀನು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳುಹಿಸಬೇಕು>> ಎಂದು ಆಜ್ಞಾಪಿಸಿದನು.3ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲರ ಮುಖ್ಯಸ್ಥರನ್ನು ಕಳುಹಿಸಿದನು.4ಅವರ ಹೆಸರುಗಳು ಯಾವುವೆಂದರೆ: ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ,5ಸಿಮೆಯೋನ್ ಕುಲದ ಹೋರಿಯನ ಮಗನಾದ ಶಾಫಾಟ್,6ಯೆಹೂದ ಕುಲದ ಯೆಫುನ್ನೆಯನ ಮಗನಾದ ಕಾಲೇಬ್,7ಇಸ್ಸಾಕಾರ್ ಕುಲದ ಯೋಸೇಫನ ಮಗನಾದ ಇಗಾಲ್,8ಎಫ್ರಾಯೀಮ್ ಕುಲದ ನೂನನ ಮಗನಾದ ಹೋಶೇಯ,9ಬೆನ್ಯಾಮೀನ್ ಕುಲದ ರಾಫೂವನ ಮಗನಾದ ಪಲ್ಟೀ,10ಜೆಬುಲೂನ್ ಕುಲದ ಸೋದೀಯನ ಮಗನಾದ ಗದ್ದೀಯೇಲ್,11ಯೋಸೇಫ್ ಅಂದರೆ ಮನಸ್ಸೆ ಕುಲದ ಸೂಸೀಯನ ಮಗನಾದ ಗದ್ದೀ,12ದಾನ್ ಕುಲದ ಗೆಮಲ್ಲೀಯನ ಮಗನಾದ ಅಮ್ಮೀಯೇಲ್,13ಆಶೇರ್ ಕುಲದ ಮೀಕಾಯೇಲನ ಮಗನಾದ ಸೆತೂರ್,14ನಫ್ತಾಲಿ ಕುಲದ ವಾಪೆಸೀಯನ ಮಗನಾದ ನಹಬೀ,15ಗಾದ್ ಕುಲದ ಮಾಕೀಯನ ಮಗನಾದ ಗೆಯೂವೇಲ್.16ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.17ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, <<ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.18ಅಲ್ಲಿನ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಜನರೋ ಅಥವಾ ಸ್ವಲ್ಪ ಜನರೋ,19ಅವರ ದೇಶವು ಒಳ್ಳೆಯದೋ ಅಥವಾ ಕೆಟ್ಟದ್ದೋ? ಅವರ ಪಟ್ಟಣಗಳು ಪಾಳೆಯಗಳೋ ಅಥವಾ ಕೋಟೆಗಳೋ?20ಭೂಮಿಯು ಸಾರವಾದುದೋ ಅಥವಾ ನಿಸ್ಸಾರವಾದುದೋ, ಮರಗಳುಳ್ಳದ್ದೋ ಅಥವಾ ಬಯಲುಪ್ರದೇಶವೋ ಎಂದು ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ನೀವು ಧೈರ್ಯವುಳ್ಳವರಾಗಿದ್ದು ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಬೇಕು>> ಎಂದು ಹೇಳಿದನು. ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.21ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.22ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.23ಅವರು ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಾಲತೆಯಿಂದ ಒಂದೇ ಗೊಂಚಲುಳ್ಳ ಕೊಂಬೆಯನ್ನು ಕೊಯ್ದರು; ಇಬ್ಬರು ಅದನ್ನು ಅಡ್ಡಕೋಲಿನಿಂದ ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಮತ್ತು ಅಂಜೂರದ ಹಣ್ಣುಗಳನ್ನೂ ತಂದರು.24ಇಸ್ರಾಯೇಲರು ಅಲ್ಲಿ ಆ ದ್ರಾಕ್ಷಿಯ ಗೊಂಚಲನ್ನು ಕೊಯ್ದದ್ದರಿಂದಲೇ ಆ ಸ್ಥಳಕ್ಕೆ << ಎಷ್ಕೋಲ್>> ಎಂದು ಹೆಸರು ಉಂಟಾಯಿತು.ಗೂಢಚಾರರು ಸಲ್ಲಿಸಿದ ವರದಿ
25ಅವರು ನಲ್ವತ್ತು ದಿನಗಳು ಆ ದೇಶವನ್ನು ಸಂಚರಿಸಿ ನೋಡಿದರು.26ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.27ಅವರು ಮೋಶೆಗೆ, <<ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.28ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರಿರುವ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇದೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ನೋಡಿದೆವು.29ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ>> ಎಂದು ತಿಳಿಸಿದರು.30ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, <<ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ>> ಎಂದು ಹೇಳಿದನು.31ಆದರೆ ಅವನ ಜೊತೆಯಲ್ಲಿ ಹೋದವರು, <<ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ>> ಎಂದು ಹೇಳಿದರು.32ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, <<ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು.33ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು>> ಎಂದು ಹೇಳಿದರು.
14ಜನರು ಮೋಶೆಯ ವಿರುದ್ಧ ತಿರುಗಿಬಿದ್ದು ನಾಶವಾದದ್ದು
1ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.2ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, <<ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು3ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ>> ಎಂದು ಮಾತನಾಡಿಕೊಂಡರು.4ಹೀಗೆ ಅವರು ಒಬ್ಬರ ಸಂಗಡಲೊಬ್ಬರು, <<ನಾವು ಬೇರೆ ನಾಯಕನನ್ನು ನೇಮಿಸಿಕೊಂಡು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗೋಣ>> ಎಂದು ಮಾತನಾಡಿಕೊಂಡರು.5ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು.6ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.7ಅವರು ಇಸ್ರಾಯೇಲರ ಸರ್ವಸಮೂಹದವರಿಗೆ ಹೀಗೆ ಹೇಳಿದರು, <<ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು.8ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.9ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ>> ಎಂದರು.10ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು.11ಯೆಹೋವನು ಮೋಶೆಗೆ, <<ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?12ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು>> ಎಂದು ಹೇಳಿದನು.13ಅದಕ್ಕೆ ಮೋಶೆಯು ಯೆಹೋವನಿಗೆ, <<ನೀನು ಹೀಗೆ ಮಾಡುವುದಾದರೆ ಐಗುಪ್ತ್ಯರು ಈ ಸುದ್ದಿಯನ್ನು ಕೇಳುವರು. ಅವರ ಕೈಯಿಂದ ನೀನು ಈ ಜನರನ್ನು ಭುಜಪರಾಕ್ರಮದಿಂದ ಬಿಡಿಸಿದ ಈ ಸಂಗತಿಯನ್ನು ಈ ಕಾನಾನ್ ದೇಶದ ನಿವಾಸಿಗಳಿಗೆ ತಿಳಿಸುವರು.14ಅಲ್ಲದೆ ಯೆಹೋವನಾದ ನೀನು ಇಸ್ರಾಯೇಲರ ಮಧ್ಯದಲ್ಲಿ ಇರುವ ಸಂಗತಿಯನ್ನು, ನೀನು ಇಸ್ರಾಯೇಲರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವುದನ್ನು, ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುವುದಾಗಿ ಹಾಗೂ ನೀನಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಈ ದೇಶದವರು ಕೇಳಿದ್ದಾರೆ.15ಹೀಗಿರಲಾಗಿ ನೀನು ಒಂದೇ ಪೆಟ್ಟಿನಿಂದ ಈ ಜನರನ್ನೆಲ್ಲಾ ಸಾಯಿಸಿದರೆ ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗದವರು ನಿನ್ನ ವಿಷಯದಲ್ಲಿ,16<< <ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಆ ಜನರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ, ಅವರನ್ನು ಅರಣ್ಯದಲ್ಲಿ ಕೊಂದುಹಾಕಿಬಿಟ್ಟನು> ಎಂದು ಮಾತನಾಡಿಕೊಳ್ಳುವರು.17ಈಗ ನೀನು ಹೇಳಿದ ಪ್ರಕಾರ ಯೆಹೋವನ ಬಲವು ದೊಡ್ಡದಾಗಿರಲಿ ಎಂದು ಬೇಡಿಕೊಳ್ಳುತ್ತೇನೆ. ನಿನ್ನ ವಿಷಯದಲ್ಲಿ,18<ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು> ಎಂದು ಹೇಳಿದ್ದಿ.19ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ>> ಎಂದು ಪ್ರಾರ್ಥಿಸಿದನು.20ಅದಕ್ಕೆ ಯೆಹೋವನು, <<ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಅವರನ್ನು ಕ್ಷಮಿಸಿದ್ದೇನೆ.21ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು.22ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ23ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.24ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.25ಅಮಾಲೇಕ್ಯರೂ, ಕಾನಾನ್ಯರೂ ಆ ತಗ್ಗಿನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿ ಕೆಂಪು ಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು>> ಎಂದು ಹೇಳಿದನು.26ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,27<<ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.28ನೀನು ಅವರಿಗೆ ಹೀಗೆ ಹೇಳಬೇಕು, <ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.29ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು.30ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.31ಆದರೆ ಇತರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭವಿಸುವರು.32ನೀವಂತೂ ಈ ಅರಣ್ಯದಲ್ಲಿ ಸಾಯುವಿರಿ.33ನಿಮ್ಮೆಲ್ಲರ ಶವಗಳು ಈ ಮರುಭೂಮಿಯಲ್ಲಿ ಬೀಳುವವರೆಗೂ ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಲ್ವತ್ತು ವರ್ಷ ಮರುಭೂಮಿಯಲ್ಲಿ ವಾಸಿಸಬೇಕು.34ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.35ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು> >> ಎಂದು ಹೇಳಿದನು.36ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟ ಮನುಷ್ಯರು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭ ಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟುವಂತೆ ಮಾಡಿದರು.37ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.38ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಉಳಿದರು.39ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು.40ಮರುದಿನ ಬೆಳಿಗ್ಗೆ ಜನರು ಎದ್ದು, <<ನಾವು ಪಾಪ ಮಾಡಿರುವುದು ನಿಜ; ಯೆಹೋವನು ವಾಗ್ದಾನ ಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ>> ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋದರು.41ಆದರೆ ಮೋಶೆ ಅವರಿಗೆ, <<ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ಇದು ಸಫಲವಾಗುವುದಿಲ್ಲ.42ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ, ಹತ್ತಬೇಡಿರಿ. ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತುಹೋಗುವಿರಿ.43ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ>> ಎಂದು ಹೇಳಿದನು.44ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವಾಗಲಿ ಮೋಶೆಯಾಗಲಿ ಪಾಳೆಯವನ್ನು ಬಿಟ್ಟು ಹೊರಡಲಿಲ್ಲ.45ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.
15ಯಜ್ಞಪಶುಗಳೊಡನೆ ಸಮರ್ಪಿಸಬೇಕಾದ ನೈವೇದ್ಯದ್ರವ್ಯಗಳ ವಿವರಣೆ
1ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,2<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ನಾನು ನಿಮ್ಮ ವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ,3ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,4ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.5ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು.6<< <ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ,7ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.8<< <ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,9ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.10ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು.11<< <ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.12ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು.13ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.14ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.15ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.16ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.> >>ಯಾಜಕರಿಗೆ ಪ್ರತ್ಯೇಕಿಸಬೇಕಾದ ರೊಟ್ಟಿಯ ನಿಯಮ
17ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,18<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದ ನಂತರ,19ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.20ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.ತಿಳಿಯದೆ ಮಾಡಿದ ತಪ್ಪಿಗಾಗಿ ದೋಷಪರಿಹಾರವನ್ನು ಮಾಡುವ ವಿಧಾನ
21<< <ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.22ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,23ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿನದಿಂದ ಮೊದಲುಗೊಂಡು ನಿಮಗೂ ಮತ್ತು ನಿಮ್ಮ ಸಂತತಿಗೂ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ನೀವು ಮಾಡದೆ ಹೋದರೆ,24ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.25ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,26ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು.27<< <ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.28ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.29ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,30ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.31ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.> >>ಸಬ್ಬತ್ ದಿನದಲ್ಲಿ ಕೆಲಸಮಾಡಿದವನಿಗೆ ಮರಣಶಿಕ್ಷೆ ವಿಧಿಸಲ್ಪಟ್ಟಿದ್ದು
32ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.33ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.34ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.35ತರುವಾಯ ಯೆಹೋವನು ಮೋಶೆಗೆ, <<ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು>> ಎಂದು ಆಜ್ಞಾಪಿಸಿದನು.36ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು.ಇಸ್ರಾಯೇಲರು ಬಟ್ಟೆಯ ಮೂಲೆಗಳಿಗೆ ಗೊಂಡೆ ಕಟ್ಟಿಕೊಳ್ಳಬೇಕೆಂಬುದು
37ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,38<<ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.39ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ40ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ.41ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.>>
16ಕೋರಹನ, ದಾತಾನ್, ಅಬೀರಾಮರ, ವಿರೋಧ
1ಆಗ ಲೇವಿಯನ ಮರಿಮಗನೂ, ಕೆಹಾತನ ಮೊಮ್ಮಗನೂ, ಇಚ್ಚಾರನ ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನನೂ, ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ ಕರೆದುಕೊಂಡು, ಕೆಲವು ಜನರನ್ನು ಕೂಡಿಸಿದರು.2ಇಸ್ರಾಯೇಲರ ಸಮೂಹದವರಲ್ಲಿದ್ದ ಮುಖ್ಯಸ್ಥರೂ, ಪ್ರಸಿದ್ಧರಾಗಿ ಹೆಸರು ಹೊಂದಿದ ಇನ್ನೂರೈವತ್ತು ಜನರು ಮೋಶೆಗೆ ವಿರುದ್ಧವಾಗಿ ಪ್ರತಿಭಟಿಸಿ ತಿರುಗಿಬಿದ್ದರು.3ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, <<ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?>> ಎಂದು ಕೇಳಿದರು.4ಮೋಶೆ ಆ ಮಾತನ್ನು ಕೇಳಿ ಬೋರಲುಬಿದ್ದನು.5ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, <<ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.6ನೀವು ಇದನ್ನು ಮಾಡಿರಿ- ಕೋರಹನೂ ಮತ್ತು ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು,7ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ ವರ್ತನೆ ಅತಿಯಾಯಿತು>> ಎಂದು ಹೇಳಿದನು.8ಪುನಃ ಮೋಶೆ ಕೋರಹನಿಗೆ, <<ಲೇವಿಯ ಸಂತಾನದವರೇ, ಈಗ ಕೇಳಿರಿ,9ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?10ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?11ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?>> ಎಂದು ಕೇಳಿದನು.12ಮೋಶೆಯು, ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬೀರಾಮರನ್ನು ಕರೆದುಕೊಂಡು ಬರಲು ಹೇಳಿದರು ಅವರು ಅವನಿಗೆ, <<ನಾವು ಬರುವುದಿಲ್ಲ.13ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?14ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ>> ಎಂದು ಹೇಳಿದನು.15ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, <<ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ>> ಎಂದು ಮನವಿಮಾಡಿದನು.16ಮೋಶೆ ಕೋರಹನಿಗೆ, <<ನಾಳೆ ನೀನೂ, ನಿನ್ನ ಸಮೂಹದವರೆಲ್ಲರೂ ಮತ್ತು ಆರೋನನೂ ಯೆಹೋವನ ಸನ್ನಿಧಿಗೆ ಬರಬೇಕು.17ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಗಳನ್ನು, ಒಟ್ಟಾಗಿ ಇನ್ನೂರೈವತ್ತು ಧೂಪಾರತಿಯನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನು ಮತ್ತು ಆರೋನನು ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು>> ಎಂದು ಹೇಳಿದನು.18ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.19ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.20ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,21<<ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ>> ಎಂದು ಆಜ್ಞಾಪಿಸಿದನು.22ಅವರು ಬೋರಲುಬಿದ್ದು, <<ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?>> ಎಂದು ಬಿನ್ನೈಸಿದನು.23ಆಗ ಯೆಹೋವನು ಮೋಶೆಗೆ ಉತ್ತರವಾಗಿ,24<<ಇಸ್ರಾಯೇಲರ ಸಮೂಹದವರಿಗೆ, <ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರವಿರಬೇಕು> ಎಂದು ಅವರಿಗೆ ಆಜ್ಞಾಪಿಸು>> ಎಂದು ಹೇಳಿದನು.25ಆಗ ಮೋಶೆ ಎದ್ದು ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.26ಅವನು ಇಸ್ರಾಯೇಲರ ಸಮೂಹದವರಿಗೆ, <<ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು>> ಎಂದು ಹೇಳಿದನು.27ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.28ಆಗ ಮೋಶೆ ಜನರಿಗೆ, <<ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.29ಹೇಗೆಂದರೆ, ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಇಲ್ಲವೆ ಎಲ್ಲರಿಗೂ ಸಂಭವಿಸುವ ಗತಿ ಇವರಿಗುಂಟಾದರೆ ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.30ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು>> ಎಂದು ಹೇಳಿದನು.31ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಮನುಷ್ಯರ ಕೆಳಗಿದ್ದ ನೆಲವು ಸೀಳಿತು.32ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.33ಅವರು ಸಜೀವಿಗಳಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಹೋಗಿಬಿಟ್ಟರು, ಭೂಮಿಯು ಅವರನ್ನು ಮುಚ್ಚಿಕೊಂಡಿತು. ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು.34ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಹೆದರಿಕೊಂಡು, <<ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!>> ಎಂದು ಹೇಳಿ ಓಡಿಹೋದರು.35ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.36ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ37<<ಯಾಜಕನಾದ ಆರೋನನ ಮಗನಾದ ಎಲ್ಲಾಜಾರನಿಗೆ, ಧೂಪಾರತಿಗಳು ಪರಿಶುದ್ಧವಾಗಿರುವುದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಆ ಧೂಪಾರತಿಗಳನ್ನು ತೆಗೆಯಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರ ಚೆಲ್ಲು.38ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು>> ಎಂದು ಹೇಳಿದನು.39ಆಗ ಯಾಜಕನಾದ ಎಲ್ಲಾಜಾರನು ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ದಹಿಸಿಹೋದವರು ಅರ್ಪಿಸಿದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಮಾಡಿಸಿ, ಯಜ್ಞವೇದಿಯನ್ನು ಮುಚ್ಚಿದನು.40ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.ಜನರು ಗುಣುಗುಟ್ಟಿ ಘೋರವ್ಯಾಧಿಯಿಂದ ಸತ್ತದ್ದು
41ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, <<ನೀವೇ ಯೆಹೋವನ ಜನರನ್ನು ಸಾಯಿಸಿದಿರಿ>> ಎಂದು ಹೇಳುವವರಾದರು.42ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಆವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು.43ಮೋಶೆ ಮತ್ತು ಆರೋನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದರು.44ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,45<<ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ>> ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.46ಮೋಶೆಯು ಆರೋನನಿಗೆ, <<ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು>> ಎಂದು ಹೇಳಿದನು.47ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.48ಅವನು ಸತ್ತವರಿಗೂ, ಬದುಕುವವರಿಗೂ ಮಧ್ಯದಲ್ಲಿ ನಿಂತುಕೊಂಡುದರಿಂದ ಆ ವ್ಯಾಧಿಯು ಶಮನವಾಯಿತು.49ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ಆ ವ್ಯಾಧಿಯಿಂದ ಸತ್ತವರ ಸಂಖ್ಯೆ ಹದಿನಾಲ್ಕು ಸಾವಿರದ ಏಳುನೂರು ಮಂದಿ.50ಆ ವ್ಯಾಧಿ ಶಮನವಾದಾಗ ಆರೋನನು ದೇವದರ್ಶನದ ಗುಡಾರದ ಬಾಗಿಲಿಗೆ ಮೋಶೆಯ ಬಳಿಗೆ ಹಿಂತಿರುಗಿ ಬಂದನು.
17ಯೆಹೋವನು ಆರೋನನ ಕೋಲನ್ನು ಚಿಗುರಿಸಿದ್ದು
1ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,2<<ನೀನು ಇಸ್ರಾಯೇಲರ ಸಂಗಡ ಮಾತನಾಡಿ, <ಅವರ ಪೂರ್ವಿಕರ ಒಂದೊಂದು ಕಾಲದ ಅಧಿಪತಿಯಿಂದ ಗೋತ್ರಗಳ ಪ್ರಕಾರವಾಗಿ ಒಂದೊಂದು ಕೋಲುಗಳನ್ನು ತೆಗೆದುಕೊಳ್ಳಬೇಕು. ಗೋತ್ರಗಳ ಪ್ರಕಾರವಾಗಿ ಒಬ್ಬೊಬ್ಬ ಪ್ರಧಾನರ ಹೆಸರಿನಲ್ಲಿ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಅವರ ಹೆಸರನ್ನು ಬರೆಯಿಸಬೇಕು.3ಲೇವಿ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು ಏಕೆಂದರೆ ಅವರ ಪೂರ್ವಿಕರ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.4ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.5ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು> >> ಎಂದನು.6ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.7ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು.8ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು!9ಮೋಶೆ ಆ ಕೋಲುಗಳನ್ನೆಲ್ಲಾ ಯೆಹೋವನ ಸನ್ನಿಧಿಯಿಂದ ಇಸ್ರಾಯೇಲರ ಬಳಿಗೆ ತಂದು ತೋರಿಸಿದನು. ಅವರು ನೋಡಿ ತಮ್ಮತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು.10ತರುವಾಯ ಯೆಹೋವನು ಮೋಶೆಗೆ, <<ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟುವುದನ್ನು ಸಂಪೂರ್ಣವಾಗಿ ನಿಲ್ಲಿಸಿಬಿಡಬೇಕು>> ಎಂದು ಆಜ್ಞಾಪಿಸಿದನು.11ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.12ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, <<ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.13ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?>> ಎಂದು ಕೇಳಿದರು.
18ಯಾಜಕರ ಮತ್ತು ಲೇವಿಯರ ಕರ್ತವ್ಯ
1ಆಗ ಯೆಹೋವನು ಆರೋನನಿಗೆ, <<ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.2ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.3ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.4ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು.5ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.6ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.7ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು>> ಎಂದನು.ಯಾಜಕರಿಗಾಗಿ ಮತ್ತು ಲೇವಿಯರಿಗಾಗಿ ಕಾಣಿಕೆಗಳು
8ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, <<ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.9ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.10ನೀವು ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು.11<<ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.12ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.13ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.14ಕೇವಲ ಯೆಹೋವನಿಗೋಸ್ಕರ ಇರುವುದಕ್ಕೆ ಇಸ್ರಾಯೇಲರು ಹರಕೆಮಾಡಿ ಸಮರ್ಪಿಸುವುದೆಲ್ಲವೂ ನಿನಗೆ ಸೇರಬೇಕು.15ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.16ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ನೀವು ಗೊತ್ತು ಮಾಡಿದ ಈಡನ್ನು ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ಶೆಕೆಲ್ ಪ್ರಕಾರ ಐದು ಶೆಕೆಲ್ ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.17<<ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮುಕಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.18ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು.19ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು>> ಎಂದು ಹೇಳಿದನು.20ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, <<ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ.ಲೇವಿಯರ ಪಾಲು
21<<ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.22ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು.23ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ.24ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ಲೇವಿಯರಿಗೆ <ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ> >> ಎಂದು ಹೇಳಿದ ಮಾತಿಗೆ ಇದೇ ಕಾರಣ.25ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,26<<ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, <ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.27ನೀವು ಹೀಗೆ ಸಮರ್ಪಿಸಿದ ಹತ್ತನೆಯ ಒಂದು ಭಾಗದ ಕಣದಲ್ಲಿನ ಧಾನ್ಯವನ್ನೂ, ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಮಾಂಶವೆಂದು ಪರಿಗಣಿಸಲ್ಪಡುವುದು.28ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.29ನಿಮಗೆ ಕೊಡಲ್ಪಡುವ ಸಕಲ ಪದಾರ್ಥಗಳಲ್ಲಿಯೂ ನೀವು ಉತ್ತಮ ಭಾಗವನ್ನೇ ದೇವರ ವಸ್ತುವಾಗುವುದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು>30ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, <ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು.31ನೀವೂ, ನಿಮ್ಮ ಮನೆಯವರೂ ಅದನ್ನು ಎಲ್ಲಾ ಸ್ಥಳಗಳಲ್ಲಿ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ದೊರೆಯುವ ಪ್ರತಿಫಲ.32ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ> >> ಎಂದನು.
19ಮನುಷ್ಯನ ಶವವು ಸೋಂಕಿದಾಗ ಮಾಡಬೇಕಾದ ಆಚಾರವನ್ನು ಕುರಿತದ್ದು
1ಯೆಹೋವನು ಮೋಶೆ ಮತ್ತು ಆರೋನರಿಗೆ ಹೀಗೆ ಆಜ್ಞಾಪಿಸಿದನು,2<<ಯೆಹೋವನಾದ ನಾನು ಒಂದು ನಿಯಮವನ್ನು ನೇಮಿಸಿದ್ದೇನೆ, ಅದೇನೆಂದರೆ: ಎಂದೂ ನೊಗವನ್ನು ಹೊರದ ಮತ್ತು ಯಾವ ದೋಷವಿಲ್ಲದ ಪೂರ್ಣಾಂಗವಾದ ಕೆಂದಾಕಳನ್ನು ನಿಮಗೆ ತಂದುಕೊಡಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.3ಅದನ್ನು ನೀವು ಯಾಜಕನಾದ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಅವನು ಅದನ್ನು ಪಾಳೆಯದ ಹೊರಗೆ ಹೊರಡಿಸಿಕೊಂಡು ಹೋಗಿ ತನ್ನ ಎದುರೇ ಒಬ್ಬನ ಕೈಯಿಂದ ವಧೆಮಾಡಿಸಬೇಕು.4ತರುವಾಯ ಯಾಜಕನಾದ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು.5ಆಗ ಅವನು ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು.6ಯಾಜಕನು ದೇವದಾರುಮರದ ಕಟ್ಟಿಗೆಯನ್ನೂ, ಹಿಸ್ಸೋಪ್ ಗಿಡದ ಬರಲನ್ನೂ, ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಆ ಆಕಳನ್ನು ಸುಡುವ ಬೆಂಕಿಯಲ್ಲಿ ಹಾಕಬೇಕು.7ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.8ಆ ಆಕಳನ್ನು ಸುಟ್ಟವನೂ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.9<<ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನಮಾಡಬೇಕು. ಆದುದರಿಂದ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅದನ್ನು ಅಲ್ಲೇ ಇಟ್ಟಿರಬೇಕು. ಅದು ಅಶುದ್ಧವಾದದ್ದು.10ಆ ಕೆಂದಾಕಳ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಮತ್ತು ಅವರಲ್ಲಿರುವ ಪ್ರವಾಸಿಗರಿಗೂ ಶಾಶ್ವತ ನಿಯಮವಾಗಿದೆ.11<<ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.12ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವುದಿಲ್ಲ.13ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.14<<ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.15ಮುಚ್ಚಳ ಹಾಕದೆ ತೆರೆದಿರುವ ಎಲ್ಲಾ ಪಾತ್ರೆಗಳು ಅಶುದ್ಧವಾಗಿರುವವು.16ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.17<<ಅಶುದ್ಧನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು, ಅದರ ಮೇಲೆ ಶುದ್ಧವಾದ ನೀರನ್ನು ಹಾಕಬೇಕು.18ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.19ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.20ಅಶುದ್ಧನಾಗಿ ದೋಷಪರಿಹಾರ ಮಾಡಿಕೊಳ್ಳದವನು ಯೆಹೋವನ ಆಲಯವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಹೋದುದರಿಂದ ಅವನು ಅಶುದ್ಧನಾಗುವನು.21<<ಇದು ಇಸ್ರಾಯೇಲರಿಗೆ ಶಾಶ್ವತ ನಿಯಮವಾಗಿರುವುದು. ಶುದ್ಧೀಕರಣದ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.22ಅಶುದ್ಧನಿಗೆ ಸೋಂಕಿದ ವಸ್ತು ಯಾವುದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು. ಅದು ಯಾರಿಗೆ ಸೋಂಕುವುದೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.>>
20ಯೆಹೋವನು ಬಂಡೆಯೊಳಗಿಂದ ಇಸ್ರಾಯೇಲರಿಗೋಸ್ಕರ ನೀರು ಬರಮಾಡಿದ್ದು
1ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು <<ಚಿನ್>> ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.2ಸಮೂಹದವರಿಗೆ ನೀರು ಇಲ್ಲದ ಕಾರಣ ಅವರು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಕೂಡಿಕೊಂಡರು.3ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, <<ನಮ್ಮ ಜನರು ಯೆಹೋವನ ಸನ್ನಿಧಿಯಲ್ಲಿ ಸತ್ತುಹೋದಾಗಲೇ ನಾವೂ ಸಹ ಸತ್ತುಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.4ನೀವು ಯೆಹೋವನ ಸಮೂಹದವರಾದ ನಮ್ಮನ್ನೂ, ನಮ್ಮ ಪಶುಗಳನ್ನೂ ಈ ಮರಳುಗಾಡಿಗೆ ಕರೆದುಕೊಂಡು ಬಂದು ಯಾಕೆ ಸಾಯಿಸುತ್ತೀರಿ?5ನಮ್ಮನ್ನು ಐಗುಪ್ತ ದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರೆದುಕೊಂಡು ಬಂದಿದ್ದೀರಿ? ಈ ನೆಲದಲ್ಲಿ ಧಾನ್ಯವೂ, ಅಂಜೂರವೂ, ದ್ರಾಕ್ಷಿಯೂ, ದಾಳಿಂಬೆಯೂ ಮತ್ತು ಕುಡಿಯುವುದಕ್ಕೆ ನೀರೂ ಸಹ ಸಿಕ್ಕುವುದಿಲ್ಲ>> ಎಂದು ಹೇಳುತ್ತಿದ್ದರು.6ಮೋಶೆ ಮತ್ತು ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಹೋಗಿ ಬೋರಲುಬಿದ್ದಾಗ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.7ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ,8<<ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು>> ಎಂದು ಹೇಳಿದನು.9ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಆ ಕೋಲನ್ನು ಆತನ ಸನ್ನಿಧಿಯಿಂದ ತೆಗೆದುಕೊಂಡನು.10ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, <<ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?>>11ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.12ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, <<ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು>> ಎಂದು ಹೇಳಿದನು.13ಇಸ್ರಾಯೇಲರು ಅಲ್ಲಿ ಯೆಹೋವನ ಸಂಗಡ ವಾದಮಾಡಿದ್ದರಿಂದ ಆ ನೀರು ಬಂದ ಸ್ಥಳಕ್ಕೆ << ಮೆರೀಬಾ>> ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಪರಿಶುದ್ಧತೆಯನ್ನು ತೋರಿಸಿದನು.ಎದೋಮ್ಯರು ದೇಶವನ್ನು ದಾಟಲು ನಿರಾಕರಣೆ
14ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, <<ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.15ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತ್ಯರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು.16ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.17ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ>> ಎಂದು ಹೇಳಿಸಿದನು.18ಆದರೆ ಎದೋಮ್ಯರು, <<ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ>> ಎಂದು ಉತ್ತರಕೊಟ್ಟರು.19ಅದಕ್ಕೆ ಇಸ್ರಾಯೇಲರು, <<ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ಮತ್ತು ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆ ಕೊಡುವೆವು. ಬೇರೆ ಏನನ್ನು ಮಾಡದೆ, ಕಾಲ್ನಡೆಯಾಗಿ ದಾಟಿಹೋಗುವುದಕಷ್ಟೇ ನಮಗೆ ಅಪ್ಪಣೆಯಾಗಬೇಕು>> ಎಂದು ಹೇಳಿದರು.20ಆದರೆ ಎದೋಮ್ಯರು, <<ನೀವು ದಾಟಲೇ ಬಾರದು>> ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು.21ಎದೋಮ್ಯರು ಇಸ್ರಾಯೇಲರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ಹೋದುದರಿಂದ ಇಸ್ರಾಯೇಲರು ಅವರ ಕಡೆಯಿಂದ ತಿರುಗಿಕೊಂಡು ಬೇರೊಂದು ಮಾರ್ಗವಾಗಿ ಹೊರಟರು.ಆರೋನನು ಹೋರ್ ಬೆಟ್ಟದ ಮೇಲೆ ಸತ್ತದ್ದು
22ಆಗ ಇಸ್ರಾಯೇಲರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋರ್ ಎಂಬ ಬೆಟ್ಟಕ್ಕೆ ಬಂದರು.23ಯೆಹೋವನು ಎದೋಮ್ಯರ ದೇಶದ ಗಡಿಯ ಹತ್ತಿರವಿರುವ ಹೋರ್ ಎಂಬ ಬೆಟ್ಟದ ಬಳಿಯಲ್ಲಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,24<<ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.25ನೀನು ಆರೋನನನ್ನೂ, ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ.26ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಬೇಕು. ಆರೋನನು ಅಲ್ಲಿ ತನ್ನ ಪೂರ್ವಿಕರ ಬಳಿಗೆ ಸೇರಬೇಕು>> ಎಂದು ಆಜ್ಞಾಪಿಸಿದನು.27ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಹೀಗೆ ಮಾಡಿದನು. ಸರ್ವಸಮೂಹದವರು ನೋಡುತ್ತಿರಲಾಗಿ ಅವರು ಹೋರ್ ಬೆಟ್ಟವನ್ನು ಹತ್ತಿದರು.28ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.29ಆರೋನನು ಸತ್ತುಹೋದ ಸಂಗತಿಯನ್ನು ಇಸ್ರಾಯೇಲ್ ಸಮೂಹದವರು ಕೇಳಿ ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.
21ಇಸ್ರಾಯೇಲರು ಅರಾದಿನ ಅರಸನನ್ನು ಜಯಿಸಿದ್ದು
1ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಅತಾರೀಮ್ ಮಾರ್ಗವಾಗಿ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ, ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.2ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, <<ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ>> ಎಂದು ಹೇಳಿದರು.3ಯೆಹೋವನು ಇಸ್ರಾಯೇಲರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸುವಂತೆ ಮಾಡಿದನು. ಅವರನ್ನು ಮತ್ತು ಅವರ ಪಟ್ಟಣಗಳನ್ನು ಇಸ್ರಾಯೇಲರು ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಾಯಿತು.ಮೋಶೆ ತಾಮ್ರದ ಸರ್ಪವನ್ನು ಮಾಡಿಸಿದ್ದು
4ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.5ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, <<ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು>> ಎಂದು ಹೇಳಿದರು.6ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.7ಆದುದರಿಂದ ಜನರು ಮೋಶೆಯ ಬಳಿಗೆ ಬಂದು, <<ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು>> ಎಂದು ಬೇಡಿಕೊಂಡರು.8ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, <<ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು>> ಎಂದು ಆಜ್ಞಾಪಿಸಿದನು.9ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.ಮೋವಾಬ್ ಕಡೆಗೆ ಪ್ರಯಾಣ
10ತರುವಾಯ ಇಸ್ರಾಯೇಲರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.11ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.12ಅಲ್ಲಿಂದ ಹೊರಟು ಜೆರೆದ್ ತಗ್ಗಿನಲ್ಲಿ ಇಳಿದುಕೊಂಡರು.13ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ.14ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ,<<ಸೂಫಕ್ಕೆ ಸೇರಿದ ವಾಹೇಬನ್ನೂ,
ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ,
15ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವಕೊರಕಲನ್ನೂ ದಾಟಿದ್ದಾಯಿತು>> ಎಂದು ಬರೆದದೆ.
16ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, <<ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು>> ಅಂದನು.17ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು;<<ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ
18ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ,ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ>> ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ,
19ಮತ್ತಾನದಿಂದ ನಹಲೀಯೇಲಿಗೂ, ನಹಲೀಯೇಲಿನಿಂದ ಬಾಮೋತಿಗೂ ಬಂದರು.20ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ.ಸೀಹೋನ್, ಓಗ್ ಅರಸರ ಸೋಲು
21ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,22<<ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು>> ಎಂದು ಹೇಳಿದರು.23ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.24ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.25ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.26ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.27ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ;<<ಹೆಷ್ಬೋನಿಗೆ ಬನ್ನಿರಿ.
ಅದನ್ನು ಹೊಸದಾಗಿ ಕಟ್ಟಬೇಕು,
ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು.
28ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು,ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ
ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.
29ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ!ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು.
ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು.
ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ.
ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.
30ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು.
ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.>>
31ಹೀಗೆ ಇಸ್ರಾಯೇಲರು ಅಮ್ಮೋರಿಯರ ದೇಶದಲ್ಲಿ ವಾಸಮಾಡುವಂತಾಯಿತು.32ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.33ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು.34ಯೆಹೋವನು ಮೋಶೆಗೆ, <<ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು>> ಎಂದು ಹೇಳಿದನು.35ಆದಕಾರಣ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.
22ಬಾಲಾಕನು ಬಿಳಾಮನನ್ನು ಕರೆಯಿಸಿದ್ದು
1ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿ ಇಳಿದುಕೊಂಡರು.2ಇಸ್ರಾಯೇಲರು ಅಮೋರಿಯರಿಗೆ ಮಾಡಿದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. ಇವನು ಮೋವಾಬ್ಯರ ಅರಸನಾಗಿದ್ದನು.3ಇಸ್ರಾಯೇಲರು ಬಹಳ ಜನವಾಗಿರುವುದರಿಂದ ಮೋವಾಬ್ಯರು ಬಹಳ ಭಯಪಟ್ಟು ಹೆದರಿದರು.4ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, <<ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ>> ಎಂದು ಹೇಳಿದರು.5ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, <<ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ.6ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು>> ಎಂದು ಕಳುಹಿಸಿದನು.7ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.8ಬಿಳಾಮನು ಅವರಿಗೆ, <<ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು>> ಎಂದು ಹೇಳಿದನು. ಆಗ ಆ ರಾತ್ರಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.9ದೇವರು ಬಿಳಾಮನಿಗೆ, <<ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರು?>> ಎಂದು ಕೇಳಲು,10ಬಿಳಾಮನು ದೇವರಿಗೆ, <<ಮೋವಾಬ್ಯರ ಅರಸನೂ, ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ,11<ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು> >> ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.12ಅದಕ್ಕೆ ದೇವರು ಬಿಳಾಮನಿಗೆ, <<ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು>> ಎಂದು ಹೇಳಿದನು.13ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಪ್ರಧಾನರಿಗೆ, <<ನೀವು ನಿಮ್ಮ ದೇಶಕ್ಕೆ ಹೋಗಿರಿ. ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಯೆಹೋವನು ನನಗೆ ಅಪ್ಪಣೆಕೊಡಲಿಲ್ಲ>> ಎಂದು ಹೇಳಿದನು.14ಮೋವಾಬ್ಯರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು, <<ಬಿಳಾಮನು ನಮ್ಮ ಜೊತೆಯಲ್ಲಿ ಬರಲ್ಲಿಲ>> ಎಂದು ತಿಳಿಸಿದರು.15ಆದರೆ ಬಾಲಾಕನು ಅವರಿಗಿಂತಲೂ ಘನವಂತರಾದ ಹೆಚ್ಚು ಮಂದಿ ಪ್ರಧಾನರನ್ನು ಕಳುಹಿಸಿದನು.16ಇವರು ಬಿಳಾಮನ ಬಳಿಗೆ ಬಂದು ಅವನಿಗೆ, <<ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ, <ನೀನು ದಯಮಾಡಿ ನನ್ನ ಬಳಿಗೆ ಬರುವುದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ.17ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು> >> ಎಂದನು.18ಅದಕ್ಕೆ ಬಿಳಾಮನು ಬಾಲಾಕನ ಸೇವಕರಿಗೆ, <<ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.19ಆದುದರಿಂದ ನೀವೂ ಕೂಡ ಈ ರಾತ್ರಿ ಇಲ್ಲಿಯೇ ಇಳಿದುಕೊಳ್ಳಿರಿ. ಯೆಹೋವನು ಈಗ ಏನು ಹೇಳುವನೋ ಅದನ್ನು ನಿಮಗೆ ತಿಳಿಸುತ್ತೇನೆ>> ಎಂದು ಉತ್ತರಕೊಟ್ಟನು.20ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, <<ಆ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು>> ಎಂದನು.ಬಿಳಾಮನ ಕತ್ತೆ ಮಾತನಾಡಿದ್ದು
21ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ಕಡಿವಾಣ ಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು.22ಅವನು ಹೋದುದರಿಂದ ದೇವರಿಗೆ ಕೋಪವುಂಟಾಯಿತು. ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಕುಳಿತುಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.23ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಯ ಕಡೆಗೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವುದಕ್ಕೆ ಬಿಳಾಮನು ಅದನ್ನು ಹೊಡೆದನು.24ಆ ಮೇಲೆ ಯೆಹೋವನ ದೂತನು ದ್ರಾಕ್ಷಿತೋಟಗಳ ಸಂದಿನಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಯಿತ್ತು.25ಕತ್ತೆ ಯೆಹೋವನ ದೂತನನ್ನು ಪುನಃ ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರುಗಿ ಹೊಡೆದನು.26ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಿಲ್ಲದ ಇಕ್ಕಟ್ಟಾದ ಸ್ಥಳದಲ್ಲಿ ನಿಂತುಕೊಂಡನು.27ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಕತ್ತೆಯನ್ನು ಹೊಡೆದನು.28ಆಗ ಯೆಹೋವನು ಆ ಕತ್ತೆಗೆ ಮಾತನಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು, <<ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ>> ಎಂದು ಕೇಳಿತು.29ಅದಕ್ಕೆ ಬಿಳಾಮನು ಕತ್ತೆಗೆ, <<ನೀನು ಇಷ್ಟ ಬಂದಂತೆ ನನ್ನನ್ನು ಆಡಿಸಿದೆಯಲ್ಲಾ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ>> ಎಂದನು.30ಅದಕ್ಕೆ ಆ ಕತ್ತೆಯು ಬಿಳಾಮನಿಗೆ, <<ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ? ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ?>> ಎಂದಾಗ ಬಿಳಾಮನು <<ಇಲ್ಲ>> ಎಂದನು.31ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು.32ಯೆಹೋವನ ದೂತನು ಅವನಿಗೆ, <<ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.33ಆ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನ ಎದುರಿನಿಂದ ವಾರೆಯಾಗಿ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದರೆ ನಾನು ಕತ್ತೆಯ ಪ್ರಾಣವನ್ನು ಉಳಿಸಿ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆನು>> ಎಂದು ಹೇಳಿದನು.34ಅದಕ್ಕೆ ಬಿಳಾಮನು ಯೆಹೋವನ ದೂತನಿಗೆ, <<ನಾನು ಪಾಪಮಾಡಿದ್ದೇನೆ. ನೀನೇ ನನಗೆ ಎದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯಲಿಲ್ಲ. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ಹೋಗುತ್ತೇನೆ>> ಎಂದನು.35ಯೆಹೋವನ ದೂತನು ಬಿಳಾಮನಿಗೆ, <<ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು>> ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.ಬಿಳಾಮ ಮತ್ತು ಬಾಲಾಕನ ಭೇಟಿ
36ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಗಡಿಯಾದ ಅರ್ನೋನ್ ನದಿಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.37ಬಾಲಾಕನು ಬಿಳಾಮನನ್ನು ಕಂಡಾಗ, <<ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?>> ಎಂದನು.38ಅದಕ್ಕೆ ಬಿಳಾಮನು ಬಾಲಾಕನಿಗೆ, <<ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು>> ಎಂದು ಹೇಳಿದನು.39ಆಗ ಬಿಳಾಮನು ಬಾಲಾಕನ ಜೊತೆಯಲ್ಲಿ ಹೋದನು. ಅವರು ಕಿರ್ಯತ್ ಹುಚೋತಿಗೆ ಬಂದರು.40ಬಾಲಾಕನು ಹೋರಿಗಳನ್ನೂ, ಕುರಿಗಳನ್ನೂ ವಧಿಸಿ ಯಜ್ಞಮಾಡಿ ಬಿಳಾಮನಿಗೂ, ಅವನ ಸಂಗಡ ಇದ್ದ ಪ್ರಧಾನರಿಗೂ ಊಟಕ್ಕೆ ಕಳುಹಿಸಿದನು.41ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು <<ಬಾಳ್>> ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.
23ಬಿಳಾಮನ ಮೊದಲನೆಯ ದೈವವಾಣಿ
1ಆಗ ಬಿಳಾಮನು ಬಾಲಾಕನಿಗೆ, <<ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು>> ಎಂದು ಹೇಳಿದನು.2ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಯಜ್ಞವೇದಿಯ ಮೇಲೆ ಒಂದು ಹೋರಿಯನ್ನು ಮತ್ತು ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು.3ಬಿಳಾಮನು ಬಾಲಾಕನಿಗೆ, <<ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು>> ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.4ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, <<ನಾನು ಆ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಒಂದೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನು, ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ>> ಎಂದು ಹೇಳಿದನು.5ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, <<ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು>> ಎಂದು ಆಜ್ಞಾಪಿಸಿದನು.6ಬಿಳಾಮನು ಬಾಲಾಕನ ಬಳಿಗೆ ಹಿಂತಿರುಗಿ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ್ದ ಯಜ್ಞವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನ ಬಳಿಯಲ್ಲಿದ್ದರು.7ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ,<<ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು,
ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು,
<ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.>
<ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.>
8ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ?ಯೆಹೋವನು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?
9ಬಂಡೆಗಳ ಶಿಖರದಿಂದ ನಾನು ಅವರನ್ನು ನೋಡುತ್ತೇನೆ;ಗುಡ್ಡದಿಂದ ಅವರನ್ನು ದೃಷ್ಟಿಸುತ್ತೇನೆ.
ಆ ಜನಾಂಗವು ಪ್ರತ್ಯೇಕವಾಗಿ ವಾಸಿಸುವುದು.
ಆ ಜನಾಂಗವು ಇತರ ಜನಾಂಗಗಳಂತೆ ಸಾಧಾರಣ ಜನರೆಂದು ಎಣಿಸಲ್ಪಡುವುದಿಲ್ಲ.
10ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು?ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು?
ನೀತಿವಂತನು ಸಾಯುವಂತೆ ನಾನು ಸಾಯಬೇಕು.
ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!>> ಎಂದನು.
11ಬಾಲಾಕನು ಬಿಳಾಮನಿಗೆ, <<ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿದೆ>> ಎಂದು ಹೇಳಿದನು.12ಅದಕ್ಕೆ ಬಿಳಾಮನು, <<ಯೆಹೋವನು ಹೇಳುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ?>> ಎಂದನು.ಬಿಳಾಮನ ಎರಡನೆಯ ದೈವವಾಣಿ
13ಆಗ ಬಾಲಾಕನು, <<ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು>> ಎಂದನು.14ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.15ಬಿಳಾಮನು ಬಾಲಾಕನಿಗೆ, <<ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು>> ಎಂದು ಹೇಳಿದನು.16ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟನು. ಆಗ ಅವನು ಹೇಳಿದ್ದೇನೆಂದರೆ, <<ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಹೀಗೆ ಹೇಳಬೇಕು>> ಎಂದನು.17ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, <<ಯೆಹೋವನು ಏನು ಹೇಳಿದ್ದಾನೆ?>> ಎಂದನು.18ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ,<<ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು.
ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.
19ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ.ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ.
ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ?
ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
20ಅವರನ್ನು ಆಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು.ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.
21ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ.
ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ,
ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.
22ಅವರನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದವನು ದೇವರೇ,ಅವರು ಕಾಡುಕೋಣದಷ್ಟು ಬಲವುಳ್ಳವರು.
23ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ,ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ.
ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು.
<ದೇವರು ಮಾಡುವ ಕೆಲಸವನ್ನು ನೋಡಿರಿ!>
24ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ;ಸಿಂಹವು ಮೃಗವನ್ನು ಕೊಂದು
ಮಾಂಸವನ್ನು ತಿಂದು ತೃಪ್ತಿಹೊಂದದ ಹೊರತು ಮಲಗುವುದಿಲ್ಲ
ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.>>
25ಆಗ ಬಾಲಾಕನು ಬಿಳಾಮನಿಗೆ, <<ನೀನು ಅವರನ್ನು ಶಪಿಸಲೂ ಬೇಡ; ಆಶೀರ್ವದಿಸಲೂ ಬೇಡ>> ಎಂದು ಹೇಳಿದನು.26ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, <<ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಲಿಲ್ಲವೇ?>> ಎಂದನು.ಬಿಳಾಮನ ಮೂರನೆಯ ದೈವವಾಣಿ
27ತರುವಾಯ ಬಾಲಾಕನು ಬಿಳಾಮನಿಗೆ, <<ಬೇರೊಂದು ಸ್ಥಳಕ್ಕೆ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವುದಕ್ಕೆ ದೇವರು ಅನುಮತಿ ಕೊಡಬಹುದು>> ಎಂದು ಹೇಳಿದನು.28ಆದಕಾರಣ ಬಾಲಾಕನು ಬಿಳಾಮನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ.29ಆಗ ಬಿಳಾಮನು ಬಾಲಾಕನಿಗೆ, <<ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು>> ಎಂದು ಹೇಳಿದನು30ಬಿಳಾಮನ ಅಪ್ಪಣೆಯ ಪ್ರಕಾರ ಬಾಲಾಕನು ಪ್ರತಿಯೊಂದು ಯಜ್ಞ ವೇದಿಯಲ್ಲಿ ಒಂದು ಹೋರಿಯನ್ನೂ. ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು. 241ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.2ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ,3ಹೀಗೆ ಪ್ರವಾದಿಸಿದನು,<<ಬೆಯೋರನ ಮಗನಾದ ಬಿಳಾಮನು ಹೇಳಿದ್ದು,
ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
4ದೇವರ ಮಾತುಗಳನ್ನು ಕೇಳುವವನಾಗಿಯೂ,ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ
ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು.
5ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ,ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.
6ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ.ನದಿಯ ಬಳಿಯಲ್ಲಿರುವ ತೋಟಗಳಂತೆಯೂ,
ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ
ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ.
7ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ,ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು.
ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು.
ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು.
8ದೇವರು ಅವನನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದನು.ಅವರು ಕಾಡುಕೋಣದಷ್ಟು ಬಲವುಳ್ಳವರು.
ಅವರು ಶತ್ರುಜನರನ್ನು ನಿರ್ಮೂಲಮಾಡುವರು.
ವೈರಿಗಳ ಎಲುಬುಗಳನ್ನು ಮುರಿದುಹಾಕುವರು.
ಅವರನ್ನು ಬಾಣಗಳಿಂದ ಗಾಯಪಡಿಸುವರು.
9ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ,ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು?
ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ,
ಶಪಿಸುವವನಿಗೆ ಶಾಪವೂ ಉಂಟಾಗುವುದು>> ಎಂದನು.
10ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, <<ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.11ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ>> ಎಂದು ಹೇಳಿದನು.12ಅದಕ್ಕೆ ಬಿಳಾಮನು ಬಾಲಾಕನಿಗೆ, <<ನೀನು ನನ್ನ ಬಳಿ ಕಳುಹಿಸಿದ ಸೇವಕನಿಗೆ,13<ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?>14ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ>> ಎಂದನು.ಬಿಳಾಮನ ನಾಲ್ಕನೆಯ ದೈವವಾಣಿ
15ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದನು,<<ಬೆಯೋರನ ಮಗನಾದ ಬಿಳಾಮನಿಗುಂಟಾದ ದೈವೋಕ್ತಿ,
ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
16ದೇವರ ಮಾತುಗಳನ್ನು ಕೇಳುವವನೂ,ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ,
ಪರವಶವಾಗಿ ಕಣ್ಣುತೆರೆದು,
ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.
17ನಾನು ಅವನನ್ನು ನೋಡುವೆನು, ಈಗಲ್ಲ.ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ.
ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು.
ಇಸ್ರಾಯೇಲರಲ್ಲಿ ರಾಜದಂಡವು ಏಳುವುದು.
ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು
ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.
18ಅದಲ್ಲದೆ ಇಸ್ರಾಯೇಲರು ಎದೋಮ್ಯರ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ,ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.
19ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು,ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು>> ಎಂದನು.
ಬಿಳಾಮನ ಅಂತಿಮ ದೈವವಾಣಿ
20ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ,<<ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ,
ಆದರೂ ನಾಶನವೇ ಅವರ ಗತಿ.>>
21ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ,<<ನಿಮ್ಮ ನಿವಾಸ ಸ್ಥಳವು ಶಾಶ್ವತವಾಗಿಯೇ ತೋರುತ್ತದೆ,
ಬೆಟ್ಟದ ತುದಿಯಲ್ಲಿ ಗೂಡನ್ನು ಮಾಡಿಕೊಂಡಿದ್ದೀರಿ.
22ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನ್ನುತ್ತೀರೋ?ಅಶ್ಶೂರ್ಯರೇ ನಿಮ್ಮನ್ನು ಸೆರೆಹಿಡಿದುಕೊಂಡು ಹೋಗುವರು.>>
23ಅವನು ಮತ್ತೂ ಕಡೆಯದಾಗಿ ಪ್ರವಾದಿಸಿದ್ದೇನೆಂದರೆ,<<ಅಯ್ಯೋ! ದೇವರು ಹೀಗೆ ಮಾಡುವಾಗ ಯಾರು ಉಳಿಯುವರು?
24ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದುಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು;
ಅವರಿಗೂ ನಾಶನವುಂಟಾಗುವುದು>> ಎಂದನು.
25ತರುವಾಯ ಬಿಳಾಮನು ಸ್ವದೇಶಕ್ಕೆ ತಿರುಗಿ ಹೋದನು, ಬಾಲಾಕನೂ ಹೊರಟುಹೋದನು.
25ಮೋವಾಬ್ ಸ್ತ್ರೀಯರು ಇಸ್ರಾಯೇಲರನ್ನು ದ್ರೋಹಿಗಳನ್ನಾಗಿ ಮಾಡಿದ್ದು
1ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.2ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.3ಹೀಗೆ ಇಸ್ರಾಯೇಲರು ಪೆಗೋರದ ಬಾಳನ ಭಕ್ತರಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.4ಆದುದರಿಂದ ಯೆಹೋವನು ಮೋಶೆಗೆ, <<ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು>> ಎಂದು ಹೇಳಿದನು.5ಆದಕಾರಣ ಮೋಶೆ ಇಸ್ರಾಯೇಲರ ಮುಖಂಡರಿಗೆ, <<ಪೆಗೋರದ ಬಾಳ್ ನನ್ನು ಪೂಜಿಸುವ ಜನರು ನಿಮ್ಮ ವಶದಲ್ಲಿದ್ದರೆ ಅಂಥವನಿಗೆ ಮರಣ ಶಿಕ್ಷೆಯನ್ನು ವಿಧಿಸಬೇಕು>> ಎಂದು ಆಜ್ಞಾಪಿಸಿದನು.6ಇಸ್ರಾಯೇಲರಲ್ಲಿ ಒಬ್ಬನು ಮೋಶೆ ಮತ್ತು ಇಸ್ರಾಯೇಲರ ಸರ್ವಸಮೂಹದವರ ಎದುರಿನಲ್ಲಿಯೇ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಬಂದನು.7ಕೂಡಲೆ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು.8ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲನನ್ನೂ ಮತ್ತು ಆ ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು.9ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು.10ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ,11<<ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.12ಆದಕಾರಣ ನಾನು ಅವನ ಸಂಗಡ ಸ್ನೇಹದ ಒಡಂಬಡಿಕೆ ಮಾಡಿಕೊಳ್ಳುತ್ತೇನೆ ಎಂದು ಎಲ್ಲರಿಗೂ ತಿಳಿಸು.13ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ>> ಎಂದು ಹೇಳಿದನು.14ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು.15ಹತವಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಚೂರ್ ಎಂಬುವನ ಮಗಳು.16ತರುವಾಯ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,17<<ನೀನು ಮಿದ್ಯಾನ್ಯರನ್ನು ವೈರಿಯೆಂದು ತಿಳಿದು ಸಂಹರಿಸಬೇಕು.18ಅವರು ಪೆಗೋರದ ವಿಷಯದಲ್ಲಿಯೂ, ಮಿದ್ಯಾನ್ಯರ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ತ್ರೀಯ ವಿಷಯದಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದ್ದಾರೆ. ಆ ಸ್ತ್ರೀಯು ಪೆಗೋರದ ಘಟನೆಗಳ ನಿಮಿತ್ತ ಘೋರ ವ್ಯಾಧಿ ಉಂಟಾದಾಗ ಹತಳಾದವಳು.>>
26ಎರಡನೆಯ ಜನಗಣತಿ
1ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಮತ್ತು ಆರೋನನ ಮಗನೂ, ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡ ಮಾತನಾಡಿ,2<<ನೀವು ಇಸ್ರಾಯೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಅಂದರೆ ಯುದ್ಧಕ್ಕೆ ಹೊರಡತಕ್ಕವರನ್ನು ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಬೇಕು>> ಎಂದು ಆಜ್ಞಾಪಿಸಿದನು.3ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬ್ಯರ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಹತ್ತಿರ ಅವರ ಸಂಗಡ ಮಾತನಾಡಿ,4<<ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆ ಐಗುಪ್ತ ದೇಶದಿಂದ ಹೊರಟ್ಟಿದ್ದ ಮತ್ತು ಮಹಾಯಾಜಕನಾದ ಎಲ್ಲಾಜಾರನೂ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಲೆಕ್ಕಿಸಿರಿ>> ಎಂದನು.5ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು,6ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರು, ಕರ್ಮೀಯ ವಂಶಸ್ಥರಾದ ಕರ್ಮೀಯರು ಇವರೇ.7ಇವೇ ರೂಬೇನ್ಯರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ.8ಪಲ್ಲೂವಿನ ಮಗನು ಎಲೀಯಾಬ್.9ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ.10ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.11ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.12ಸಿಮೆಯೋನ್ ಕುಲದ ಕುಟುಂಬಗಳು ಯಾವುವೆಂದರೆ:ನೆಮೂವೇಲನ ವಂಶಸ್ಥರಾದ ನೆಮೂವೇಲ್ಯರು,
ಯಾಮೀನನ ವಂಶಸ್ಥರಾದ ಯಾಮೀನ್ಯರು,
ಯಾಕೀನನ ವಂಶಸ್ಥರಾದ ಯಾಕೀನ್ಯರು,
13ಜೆರಹನ ವಂಶಸ್ಥರಾದ ಜೆರಹಿಯರು,ಸೌಲನ ವಂಶಸ್ಥರಾದ ಸೌಲ್ಯರು ಇವರೇ.
14ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ.15ಗಾದ್ ಕುಲದ ಕುಟುಂಬಗಳು ಯಾವುವೆಂದರೆ:ಚೆಫೋನನ ವಂಶಸ್ಥರಾದ ಚೆಫೋನ್ಯರು,
ಹಗ್ಗೀಯ ವಂಶಸ್ಥರಾದ ಹಗ್ಗೀಯರು,
ಶೂನೀಯ ವಂಶಸ್ಥರಾದ ಶೂನೀಯರು,
16ಒಜ್ನೀಯ ವಂಶಸ್ಥರಾದ ಒಜ್ನೀಯರು,ಏರೀಯ ವಂಶಸ್ಥರಾದ ಏರೀಯರು,
17ಅರೋದನ ವಂಶಸ್ಥರಾದ ಅರೋದ್ಯರು,ಅರೇಲೀಯ ವಂಶಸ್ಥರಾದ ಅರೇಲೀಯರು ಇವರೇ.
18ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 40,500 ಮಂದಿ.19ಯೆಹೂದನ ಮಕ್ಕಳಲ್ಲಿ ಏರ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು.20ಯೆಹೂದನ ಕುಲದಲ್ಲಿ ಉಳಿದ ಕುಟುಂಬಗಳು ಯಾವುವೆಂದರೆ:ಶೇಲಹನ ವಂಶಸ್ಥರಾದ ಶೇಲಾನ್ಯರು,
ಪೆರೆಹನ ವಂಶಸ್ಥರಾದ ಪೆರೆಚ್ಯರು,
ಜೆರಹನ ವಂಶಸ್ಥರಾದ ಜೆರಹಿಯರು ಇವರೇ.
21ಪೆರೆಚನಿಂದುಂಟಾದ ಕುಟುಂಬಗಳು:ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರೂ
ಹಾಮೂಲನ ವಂಶಸ್ಥರಾದ ಹಾಮೂಲ್ಯರೂ.
22ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ.23ಇಸ್ಸಾಕಾರ್ ಕುಲದ ಕುಟುಂಬಗಳು ಯಾವುವೆಂದರೆ:ತೋಲನ ವಂಶಸ್ಥರಾದ ತೋಲಾಯರು,
ಪುವ್ವನ ವಂಶಸ್ಥರಾದ ಪೂನ್ಯರು,
24ಯಾಶೂಬನ ವಂಶಸ್ಥರಾದ ಯಾಶೂಬ್ಯರು,ಶಿಮ್ರೋನನ ವಂಶಸ್ಥರಾದ ಶಿಮ್ರೋನ್ಯರು ಇವರೇ.
25ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ.26ಜೆಬುಲೂನ್ ಕುಲದ ಕುಟುಂಬಗಳು ಯಾವುವೆಂದರೆ:ಸೆರೆದನ ವಂಶಸ್ಥರಾದ ಸೆರೆದ್ಯರು,
ಏಲೋನನ ವಂಶಸ್ಥರಾದ ಏಲೋನ್ಯರು,
ಯಹಲೇಲನ ವಂಶಸ್ಥರಾದ ಯಹಲೇಲ್ಯರು.
27ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ.28ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್.29ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ:ಮಾಕೀರನ ವಂಶಸ್ಥರಾದ ಮಾಕೀರ್ಯರು,
ಮಾಕೀರನ ಮಗನಾದ ಗಿಲ್ಯಾದನ ವಂಶಸ್ಥರಾದ ಗಿಲ್ಯಾದ್ಯರು ಇವರೇ.
30ಗಿಲ್ಯಾದನ ವಂಶದವರು ಯಾರೆಂದರೆ:ಈಯೆಜೆರನ ವಂಶಸ್ಥರಾದ ಈಯೆಜೆರ್ಯರು,
ಹೇಲೆಕನ ವಂಶಸ್ಥರಾದ ಹೇಲೆಕ್ಯರು,
31ಅಸ್ರೀಯೇಲನ ವಂಶಸ್ಥರಾದ ಅಸ್ರೀಯೇಲ್ಯರು,ಶೆಕೆಮನ ವಂಶಸ್ಥರಾದ ಶೆಕೆಮ್ಯರು,
32ಶೆಮೀದಾಯನ ವಂಶಸ್ಥರಾದ ಶೆಮೀದಾಯರು,ಹೇಫೆರನ ವಂಶಸ್ಥರಾದ ಹೇಫೆರ್ಯರು ಇವರೇ.
33ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರೇ.34ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ.35ಎಫ್ರಾಯೀಮ್ ಕುಲದ ಕುಟುಂಬಗಳು ಯಾವುವೆಂದರೆ: ಶೂತೆಲಹನ ವಂಶಸ್ಥರಾದ ಶೂತೆಲಹ್ಯರು, ಬೆಕೆರನ ವಂಶಸ್ಥರಾದ ಬೆಕೆರ್ಯರು, ತಹನನ ವಂಶಸ್ಥರಾದ ತಹನಿಯರು,36ಶೂತೆಲಹನ ಮಗನಾದ ಏರಾನನ ವಂಶಸ್ಥರಾದ ಏರಾನ್ಯರು ಇವರೇ.37ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.38ಬೆನ್ಯಾಮೀನ್ ಕುಲದ ಕುಟುಂಬಗಳು ಯಾವುವೆಂದರೆ:ಬೆಲಗನ ವಂಶಸ್ಥರಾದ ಬೆಲಗ್ಯರು,
ಅಷ್ಬೇಲನ ವಂಶಸ್ಥರಾದ ಅಷ್ಬೇಲ್ಯರು,
ಅಹೀರಾಮನ ವಂಶಸ್ಥರಾದ ಅಹೀರಾಮ್ಯರು,
39ಶೂಫಾಮನ ವಂಶಸ್ಥರಾದ ಶೂಫಾಮ್ಯರು,ಹೊಫಾಮನ ವಂಶಸ್ಥರಾದ ಹೊಫಾಮ್ಯರು ಇವರೇ.
40ಬೆಲಗನಿಗೆ ಅರ್ದ್, ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನ ವಂಶದವರು ಅರ್ದ್ಯರು, ನಾಮಾನನ ವಂಶದವರು ನಾಮಾನ್ಯರು.41ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ.42ದಾನ್ ಕುಲದ ಕುಟುಂಬಗಳು ಯಾವುವೆಂದರೆ: ಶೂಹಾಮನ ವಂಶಸ್ಥರಾದ ಶೂಹಾಮ್ಯರು.43ಶೂಹಾಮ್ಯರ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,400 ಮಂದಿ.44ಆಶೇರ್ ಕುಲದ ಕುಟುಂಬಗಳು:ಇಮ್ನಾಹನ ವಂಶಸ್ಥರಾದ ಇಮ್ನಾಹ್ಯರು,
ಇಷ್ವೀಯ ವಂಶಸ್ಥರಾದ ಇಷ್ವೀಯರು,
ಬೆರೀಯನ ವಂಶಸ್ಥರಾದ ಬೆರೀಯರು.
45ಬೆರೀಯನ ಮಕ್ಕಳಿಂದುಂಟಾದ ಕುಟುಂಬಗಳು:ಹೇಬೆರನ ವಂಶಸ್ಥರಾದ ಹೇಬೆರ್ಯರು,
ಮಲ್ಕೀಯೇಲನ ವಂಶಸ್ಥರಾದ ಮಲ್ಕೀಯೇಲ್ಯರು.
46ಆಶೇರನಿಗೆ ಸೆರಹಳೆಂಬ ಮಗಳು ಸಹ ಇದ್ದಳು.47ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 53,400 ಮಂದಿ.48ನಫ್ತಾಲಿ ಕುಲದ ಕುಟುಂಬಗಳು:ಯಹಚೇಲನ ವಂಶಸ್ಥರಾದ ಯಹಚೇಲ್ಯರು,
ಗೂನೀಯ ವಂಶಸ್ಥರಾದ ಗೂನೀಯರು,
49ಯೇಚೆರನ ವಂಶಸ್ಥರಾದ ಯೇಚೆರ್ಯರು, ಶಿಲ್ಲೇಮನ ವಂಶಸ್ಥರಾದ ಶಿಲ್ಲೇಮ್ಯರು. 50ನಫ್ತಾಲಿ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,400 ಮಂದಿ.51ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 601,730.52ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,53<<ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು.54ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ, ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವತ್ತಾಗಿ ಕೊಡಬೇಕು.55ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.56ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವತ್ತನ್ನು ಗೊತ್ತುಮಾಡಬೇಕು.>>ಲೇವಿಯರ ಜನಗಣತಿ
57ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು:ಗೇರ್ಷೋನನ ವಂಶದವರಾದ ಗೇರ್ಷೋನ್ಯರು,
ಕೆಹಾತನ ವಂಶದವರಾದ ಕೆಹಾತ್ಯರು,
ಮೆರಾರೀಯ ವಂಶದವರಾದ ಮೆರಾರೀಯರು.
58ಲೇವಿ ಕುಲದವರ ಕುಟುಂಬಗಳು:ಲಿಬ್ನೀಯರ ಕುಟುಂಬ,
ಹೆಬ್ರೋನ್ಯರ ಕುಟುಂಬ,
ಮಹ್ಲೀಯರ ಕುಟುಂಬ,
ಮೂಷೀಯರ ಕುಟುಂಬ,
ಕೋರಹಿಯರ ಕುಟುಂಬ ಇವುಗಳೇ.
ಕೆಹಾತನು ಅಮ್ರಾಮನನ್ನು ಪಡೆದನು.
59ಅಮ್ರಾಮನ ಹೆಂಡತಿ ಯಾರೆಂದರೆ: ಐಗುಪ್ತ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ, ಮೋಶೆಯೂ ಮತ್ತು ಇವರ ಅಕ್ಕ ಮಿರ್ಯಾಮಳೂ ಹುಟ್ಟಿದರು.60ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವವರು ಹುಟ್ಟಿದರು.61ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಸತ್ತುಹೋದರು.62ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ.63ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು.64ಮೋಶೆಯೂ ಮತ್ತು ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರ ಸಂಖ್ಯೆಯಲ್ಲಿ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.65ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ. 27ಚಲ್ಪಹಾದನ ಹೆಣ್ಣುಮಕ್ಕಳ ವಿನಂತಿ
1ಯೋಸೇಫನ ಕುಮಾರ ಮನಸ್ಸೆಯ ವಂಶದವರೊಳಗೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಮೋಶೆಯ ಬಳಿ ಒಂದು ವಿಜ್ಞಾಪನೆಯನ್ನು ಮಾಡಿಕೊಳ್ಳುವುದಕ್ಕೆ ಬಂದರು.2ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ,3<<ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿಲ್ಲ.4ನಮ್ಮ ತಂದೆಗೆ ಗಂಡು ಮಗನಿಲ್ಲದ ಕಾರಣದಿಂದ ಅವನ ಹೆಸರು ಕುಲದಿಂದ ತೆಗೆದು ಹಾಕುವುದು ನ್ಯಾಯವೋ? ತಂದೆಯ ಕುಲದವರೊಂದಿಗೆ ನಮಗೂ ಸ್ವತ್ತನ್ನು ಕೊಡಬೇಕು>> ಎಂದು ಕೇಳಿಕೊಂಡರು.5ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು.6ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,7<<ಚಲ್ಪಹಾದನ ಹೆಣ್ಣು ಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಕುಲದವರೊಂದಿಗೆ ಅವರಿಗೂ ನೀನು ಸ್ವತ್ತನ್ನು ಕೊಡಬೇಕು. ತಂದೆಯ ಸ್ವತ್ತು ಅವರಿಗೆ ಬರಲಿ.8<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ಯಾವನಾದರೂ ಮಗನಿಲ್ಲದೆ ಸತ್ತರೆ ಅವನ ಸ್ವತ್ತು ಅವನ ಮಗಳಿಗೆ ಆಗಬೇಕು.9ಮಗಳೂ ಇಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು.10ಅಣ್ಣತಮ್ಮಂದಿರಿಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ತಂದೆಯ ಅಣ್ಣತಮ್ಮಂದಿರಿಗೆ ಕೊಡಬೇಕು.11ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪಬಂಧುವಿಗೆ ಕೊಡಬೇಕು. ಇವನೇ ಆ ಸ್ವತ್ತನ್ನು ಅನುಭವಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲರಿಗೆ ನ್ಯಾಯನಿಯಮಗಳಾಗಿರಬೇಕು.> >>ಮೋಶೆಯ ತರುವಾಯ ಯೆಹೋವನು ಯೆಹೋಶುವನನ್ನು ನೇಮಿಸಿದ್ದು
12ಯೆಹೋವನು ಮೋಶೆಗೆ, <<ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶವನ್ನು ನೋಡು.13ನಿನ್ನ ಅಣ್ಣನಾದ ಆರೋನನು ಪೂರ್ವಿಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು.14ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು>> ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.15ಆಗ ಮೋಶೆಯು ಯೆಹೋವನ ಸಂಗಡ ಮಾತನಾಡಿ,16<<ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವನು ಈ ಜನ ಸಮೂಹದ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.17ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು>> ಎಂದು ಬೇಡಿದನು.18ಅದಕ್ಕೆ ಯೆಹೋವನು ಮೋಶೆಗೆ, <<ನನ್ನ ಆತ್ಮವುಳ್ಳ ನೂನನ ಮಗನಾದ ಯೆಹೋಶುವನು ನನ್ನ ಆತ್ಮ ಸಂಪತ್ತು ಉಳ್ಳವನು ಅವನ ಮೇಲೆ ಇಡು.19ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸಮೂಹದವರೆಲ್ಲರ ಮುಂದೆ ನಿಲ್ಲಿಸಿ ಅವನ ಮೇಲೆ ಕೈಯಿಟ್ಟು ಅವರ ಎದುರಿನಲ್ಲೇ ಅಧಿಕಾರವನ್ನು ಕೊಡಬೇಕು.20ಇಸ್ರಾಯೇಲರ ಸಮೂಹದವರೆಲ್ಲರೂ ಅವನಿಗೆ ವಿಧೇಯರಾಗಿರುವಂತೆ ನಿನ್ನ ಬಗ್ಗೆ ಇರುವ ಗೌರವವನ್ನು ಅವನಿಗೆ ಕೊಡಬೇಕು.21ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.>> ಎಂದು ಆಜ್ಞಾಪಿಸಿದನು.22ಯೆಹೋವನ ಅಪ್ಪಣೆಯ ಪ್ರಕಾರ ಮೋಶೆಯು ಯೆಹೋಶುವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸರ್ವಸಮೂಹದವರ ಮುಂದೆ ನಿಲ್ಲಿಸಿದನು.23ಅವನ ಮೇಲೆ ತನ್ನ ಕೈಗಳನ್ನಿಟ್ಟು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಅಧಿಕಾರವನ್ನು ಕೊಟ್ಟನು.
28ದೈನಿಕ ಯಜ್ಞಸಮರ್ಪಣೆಗಳು
1ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,2<<ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, <ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.>3ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, <ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.4ಹೊತ್ತಾರೆಯಲ್ಲಿ ಒಂದು ಕುರಿಯನ್ನು, ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಸಮರ್ಪಿಸಬೇಕು.5ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ, ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.6ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು.7ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.8ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು.ಸಬ್ಬತ್ ದಿನದ ಯಜ್ಞಸಮರ್ಪಣೆ
9<< <ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.10ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು.ಮಾಸಿಕ ಯಜ್ಞಸಮರ್ಪಣೆ
11<< <ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.12ಒಂದೊಂದು ಹೋರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು ಸೇರಿಸಬೇಕು.13ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು ಯೆಹೋವನಿಗೆ ಸುಗಂಧವಾಸನೆಯ ಸರ್ವಾಂಗಹೋಮಕ್ಕಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.14ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.15ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು.ಪಸ್ಕ ಹಬ್ಬದ ಯಜ್ಞಸಮರ್ಪಣೆ
16<< <ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇಮಿಸಿದ ಹಬ್ಬವಾಗಬೇಕು.17ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.18ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.19ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು.20ಇವುಗಳೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು,21ಏಳು ಕುರಿಮರಿಯಲ್ಲಿ ಒಂದೊಂದಕ್ಕೆ ಎಣ್ಣೆ ಬೆರೆಸಿದ ಮೂರು ಸೇರನ್ನು,22ಅದಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.23ಪ್ರತಿ ದಿನದ ಪ್ರಾತಃಕಾಲದಲ್ಲಿ ಸರ್ವಾಂಗಹೋಮವಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.24ಆ ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು.25ಏಳನೆಯ ದಿನದಲ್ಲೂ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.ಸುಗ್ಗಿ ಹಬ್ಬದ ಯಜ್ಞಸಮರ್ಪಣೆ
26<< <ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.27ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ,28ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ಹಾಗೂ ಪ್ರತಿಯೊಂದು ಟಗರಿಗೆ ಒಂಭತ್ತು ಸೇರು,29ಹೋರಿಗೆ ಆರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನೂ,30ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.31ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.> >>
29ತುತ್ತೂರಿಗಳ ಹಬ್ಬದ ಯಜ್ಞಸಮರ್ಪಣೆ
1<< <ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.2ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ದೋಷವಿಲ್ಲದ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.3ಧಾನ್ಯನೈವೇದ್ಯಕ್ಕಾಗಿ ಆ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಎಣ್ಣೆ ಬೆರೆಸಿದ ಆರು ಸೇರು ಹಿಟ್ಟನ್ನು,4ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಮೂರು ಸೇರು ಎಣ್ಣೆ ಬೆರಸಿದ ಹಿಟ್ಟನ್ನು,5ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.6ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು.ದೋಷಪರಿಹಾರಕ ದಿನದ ಯಜ್ಞಸಮರ್ಪಣೆ
7<< <ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆ ಸಭೆಕೂಡಬೇಕು.8ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.9ಧಾನ್ಯನೈವೇದ್ಯಕ್ಕಾಗಿ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಆರು ಸೇರು ಎಣ್ಣೆ ಬೆರೆಸಿದ ಹಿಟ್ಟನ್ನು,10ಏಳು ಕುರಿಗಳಲ್ಲಿ ಒಂದೊಂದಕ್ಕೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು,11ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕ ಯಜ್ಞಕ್ಕಾಗಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.ಗುಡಾರ ಹಬ್ಬದ ಯಜ್ಞಸಮರ್ಪಣೆ
12<< <ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.13ಆ ದಿನದಲ್ಲಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹದಿಮೂರು ಹೋರಿಗಳನ್ನೂ, ಎರಡು ಟಗರುಗಳನ್ನೂ, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಗಳನ್ನೂ,14ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಎಣ್ಣೆ ಬೆರಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು,15ಹದಿನಾಲ್ಕು ಕುರಿಮರಿಗಳಿಗೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನೂ ಸಮರ್ಪಿಸಬೇಕು.16ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ನಿತ್ಯ ಸರ್ವಾಂಗಹೋಮವನ್ನು, ಧಾನ್ಯನೈವೇದ್ಯವನ್ನು, ಪಾನದ್ರವ್ಯವನ್ನು ತಂದು ಸಮರ್ಪಿಸಬೇಕು.17<< <ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು.18ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ,19ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ನಿತ್ಯ ಸರ್ವಾಂಗಹೋಮಕ್ಕಾಗಿ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.20<< <ಮೂರನೆಯ ದಿನದಲ್ಲಿ ದೋಷವಿಲ್ಲದ ಹನ್ನೊಂದು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ,21ನೈವೇದ್ಯಕ್ಕಾಗಿ ಹೋರಿ, ಟಗರು, ಮತ್ತು ಕುರಿಮರಿಗಳನ್ನು ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.22ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.23<< <ನಾಲ್ಕನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಹತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.24ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.25ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.26<< <ಐದನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಒಂಭತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.27ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.28ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.29<< <ಆರನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಎಂಟು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.30ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.31ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.32<< <ಏಳನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ದೋಷವಿಲ್ಲದ ಏಳು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.33ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.34ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.35<< <ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆ ಕೂಡಿಬರಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು.36ನೀವು ನಿತ್ಯ ಸರ್ವಾಂಗಹೋಮಕ್ಕಾಗಿ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.37<< <ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು38ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.39<< <ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.> >>40ಯೆಹೋವನು ಮಾಡಿದ ಈ ಎಲ್ಲಾ ಆಜ್ಞೆಗಳನ್ನು ಮೋಶೆ ಇಸ್ರಾಯೇಲರಿಗೆ ತಿಳಿಸಿದನು.
30ಹರಕೆಯ ನಿಯಮಗಳು ಮತ್ತು ತೀರಿಸುವ ವಿಧಾನ
1ಮೋಶೆಯು ಇಸ್ರಾಯೇಲರ ಕುಲಾಧಿಪತಿಗಳಿಗೆ ಹೇಳಿದ್ದೇನೆಂದರೆ, <<ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ,2ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.3<<ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ4ಅವಳ ತಂದೆಯು ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು. ಯಾವುದನ್ನು ಮುಟ್ಟದೆ ಇರುವೆನೆಂದು ಹೇಳಿದಳೋ ಅದನ್ನು ಮುಟ್ಟಲೇ ಬಾರದು.5ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ, ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.6<<ಅವಳು ಮದುವೆಯಾದ ಪಕ್ಷದಲ್ಲಿ ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ,7ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಡೆಯಬೇಕು.8ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.9<<ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂತಹ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವುದು. ಅವಳು ಅದನ್ನು ನೆರವೇರಿಸಬೇಕು.10<<ಮುತ್ತೈದೆಯು ಅಂತಹ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ,11ಅವಳ ಗಂಡನು ತಿಳಿದು ಅಡ್ಡಿಮಾಡದೆ ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಿಲ್ಲುವವು.12ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಅಂಥವಳು ಯೆಹೋವನಿಗೆ ಹರಕೆ ಮಾಡಿದರೂ, ದೋಷಿಯೆಂದು ಎಣಿಸಲ್ಪಡುವುದಿಲ್ಲ.13ಹೆಂಡತಿ ಮಾಡಿದ ಹರಕೆಯನ್ನೂ, ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವುದಕ್ಕಾಗಲಿ ರದ್ದುಮಾಡುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು.14ಆದರೆ ಅವಳ ಗಂಡನು ಯಾವ ಅಡ್ಡಿಯನ್ನೂ ಮಾಡದೆ ಸುಮ್ಮನಿದ್ದರೆ ಅವನು ಅವಳ ಹರಕೆಗಳನ್ನೂ, ಪ್ರತಿಜ್ಞೆಗಳನ್ನೂ ಅವನು ನಮೂದಿಸಿದಂತೆ ಆಗುವುದು.15ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.>>16ಗಂಡಹೆಂಡತಿಯರ ವಿಷಯವಾಗಿಯೂ, ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ, ಹರಕೆಗಳ ಸಂಬಂಧವಾಗಿಯೂ ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ.
31ಇಸ್ರಾಯೇಲರು ಮಿದ್ಯಾನ್ಯರನ್ನು ಸಂಹರಿಸಿದ್ದು
1ಯೆಹೋವನು ಮೋಶೆಯ ಸಂಗಡ ಮಾತನಾಡಿ,2<<ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು>> ಎಂದು ಹೇಳಿದನು.3ಆಗ ಮೋಶೆಯು ಇಸ್ರಾಯೇಲರಿಗೆ, <<ನಿಮ್ಮೊಳಗಿಂದ ಕೆಲವರು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಸಿದ್ಧಮಾಡಿಕೊಳ್ಳಬೇಕು. ಯೆಹೋವನ ಪ್ರತಿದಂಡನೆಯನ್ನು ಅವರಿಗೆ ತೀರಿಸಬೇಕು.4ಇಸ್ರಾಯೇಲರ ಒಂದೊಂದು ಕುಲದಿಂದ ಸಾವಿರ ಜನ ಭಟರನ್ನು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಕಳುಹಿಸಬೇಕು.>>5ಆದಕಾರಣ ಇಸ್ರಾಯೇಲರು ಕುಲವೊಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಎಣಿಕೆಮಾಡಿ ಕಳುಹಿಸಿದರು.6ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.7ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಮಿದ್ಯಾನ್ಯರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನೂ ಸಂಹಾರಮಾಡಿದರು.8ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು.9ಇಸ್ರಾಯೇಲರು ಮಿದ್ಯಾನ್ಯರ ಎಲ್ಲಾ ಹೆಂಗಸರನ್ನೂ, ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ, ಆಸ್ತಿಯನ್ನೂ ಸೂರೆಮಾಡಿದರು.10ಅವರು ಇದ್ದ ಎಲ್ಲಾ ಊರುಗಳನ್ನೂ, ಪಾಳೆಯಗಳನ್ನೂ ಸುಟ್ಟುಬಿಟ್ಟರು.11ಒಂದನ್ನೂ ಬಿಡದೆ ಮನುಷ್ಯರನ್ನೂ, ಪಶುಗಳನ್ನೂ ಸೆರೆಹಿಡಿದರು.12ಮತ್ತು ಅವರು ಸೆರೆಯವರನ್ನೂ, ಪಶುಗಳನ್ನೂ, ಆಸ್ತಿಯನ್ನೂ ತೆಗೆದುಕೊಂಡು ಯೆರಿಕೋ ಪಟ್ಟಣದ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿದ್ದ ಪಾಳೆಯಕ್ಕೆ ಮೋಶೆ, ಮಹಾಯಾಜಕನಾದ ಎಲ್ಲಾಜಾರ್ ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಬಂದರು.13ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ, ಸಮೂಹದ ಪ್ರಧಾನರೂ ಪಾಳೆಯದ ಹೊರಗೆ ಹೋಗಿ ಅವರನ್ನು ಎದುರುಗೊಂಡರು.14ಆಗ ಮೋಶೆಯು ಯುದ್ಧ ಭೂಮಿಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.15ಮೋಶೆಯು ಅವರಿಗೆ, <<ನೀವು ಹೆಂಗಸರನ್ನೆಲ್ಲಾ ಉಳಿಸಿದ್ದೇನು?16ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.17ಆದಕಾರಣ ನೀವು ಈ ಗುಂಪಿನಲ್ಲಿರುವ ಎಲ್ಲಾ ಗಂಡು ಮಕ್ಕಳನ್ನೂ, ಪುರುಷ ಸಂಗಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು.18ಪುರುಷ ಸಂಗಮಾಡದಿರುವ ಕನ್ಯೆಯರನ್ನು ನಿಮಗೋಸ್ಕರ ಉಳಿಸಿಕೊಳ್ಳಬೇಕು.19ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.20ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ, ತೊಗಲಿನ ಸಾಮಾನನ್ನೂ, ಮೇಕೆ ಕೂದಲಿನ ವಸ್ತ್ರಗಳನ್ನು ಮರದ ವಸ್ತುಗಳನ್ನು ಶುದ್ಧ ಮಾಡಿಕೊಳ್ಳಬೇಕು>> ಎಂದು ಹೇಳಿದನು.21ಮಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗೆಂದನು, <<ಯೆಹೋವನು ಮೋಶೆಗೆ ಅಪ್ಪಣೆಮಾಡಿದ ನಿಯಮ ಏನೆಂದರೆ,22ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು,23ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯಿಂದ ಸುಡಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.24ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಮೇಲೆ ನೀವು ಪಾಳೆಯದೊಳಗೆ ಬರಬಹುದು>> ಎಂದು ಹೇಳಿದನು.ಕೊಳ್ಳೆಹೊಡೆದವುಗಳ ಹಂಚಿಕೆ
25ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,26<<ನೀನೂ, ಮಹಾಯಾಜಕನಾದ ಎಲ್ಲಾಜಾರನೂ, ಕುಲಾಧಿಪತಿಗಳೂ ಸಮೂಹದವರ ಕೈಗೆ ಸಿಕ್ಕಿದ ಮನುಷ್ಯರನ್ನೂ, ಪಶುಗಳನ್ನೂ ಲೆಕ್ಕಿಸಿ,27ಒಟ್ಟು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಭಟರಿಗೆ ಅರ್ಧವನ್ನೂ, ಮಿಕ್ಕ ಸಮೂಹದವರಿಗೆ ಅರ್ಧವನ್ನೂ ಹಂಚಿಕೊಡಬೇಕು.28ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ ಯೆಹೋವನಿಗೆ ಕಪ್ಪವನ್ನು ಎತ್ತಬೇಕು.29ಅವರ ಅರ್ಧಪಾಲಿನಿಂದ ಅದನ್ನು ತೆಗೆದುಕೊಂಡು ಯೆಹೋವನಿಗೆ ಅರ್ಪಣೆಯಾಗಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.30ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು>> ಎಂದು ಆಜ್ಞಾಪಿಸಿದನು.31ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ ಮಾಡಿದರು.32ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವುದಕೋಸ್ಕರ ಉಳಿದದ್ದು ಎಷ್ಟೆಂದರೆ: ಕುರಿಗಳು - 675,000,33ದನಗಳು - 72,000,34ಕತ್ತೆಗಳು - 61,000,35ಕನ್ಯೆಯರು - 32,000.36ಯುದ್ಧಕ್ಕೆ ಹೋಗಿದ್ದ ಭಟರಿಗೆ ದೊರಕಿದ ಅರ್ಧ ಭಾಗವಾಗಿರುವ ಕುರಿಗಳು - 3,37,500.37ಕುರಿಗಳಿಂದ ಯೆಹೋವನಿಗೆ ಬಂದ ಕಪ್ಪ - 675.38ಹಾಗೆಯೇ ಅವರಿಗೆ ದೊರಕಿದ 36,000, ಎತ್ತುಗಳಲ್ಲಿ ಯೆಹೋವನಿಗೆ ಬಂದ ಕಪ್ಪ - 72.39ಕತ್ತೆಗಳಲ್ಲಿ - 30,500 ಯೆಹೋವನಿಗೆ ಬಂದ ಕಪ್ಪ - 614016,000 ಕನ್ಯೆಯರಲ್ಲಿ- ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು.41ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು.42ಇಸ್ರಾಯೇಲರ ಭಟರು ತಂದ ಸುಲಿಗೆಯಲ್ಲಿ ಮೋಶೆ ಪ್ರತ್ಯೇಕಿಸಿದ ಹಂಚಿದ ಅರ್ಧ ಭಾಗದ43ಎಷ್ಟೆಂದರೆ - 337,500 ಆಡುಕುರಿಗಳು.44ಎತ್ತುಗಳು - 36,000,45ಕತ್ತೆಗಳು - 30,500,46ಕನ್ಯೆಯರು - 16,000, ಇಷ್ಟು ಇಸ್ರಾಯೇಲ ಸಮೂಹದವರ ಪಾಲಿಗೆ ಬಂದವು.47ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.48ಆಗ ದಂಡಿನ ಸಹಸ್ರಾಧಿಪತಿಗಳೂ ಮೋಶೆಯ ಬಳಿಗೆ ಬಂದು ಅವನಿಗೆ,49<<ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.50ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ>> ಎಂದರು.51ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡರು. ಅವುಗಳೆಲ್ಲಾ ವಿಚಿತ್ರವಾದ ಆಭರಣಗಳು.52ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ - 16,750 ತೊಲೆ.53ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ತೆಗೆದುಕೊಂಡರು.54ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಕೊಟ್ಟ ಚಿನ್ನವನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕ ಮಾಡುವುದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.
32ಯೊರ್ದನ್ ನದಿಯ ಮೂಡಣ ದಿಕ್ಕಿನ ಕುಲಗಳು
1ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.2ಗಾದ್ ಮತ್ತು ರೂಬೇನ್ ಸಂತತಿಯವರು ಮೋಶೆ ಮತ್ತು ಮಹಾಯಾಜಕನಾದ ಎಲ್ಲಾಜಾರನು ಬಳಿಗೂ, ಸಮೂಹದ ಪ್ರಧಾನರ ಬಳಿಗೂ ಬಂದು ಹೇಳಿದ್ದೇನೆಂದರೆ,3<<ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್,4ಇವು ಯೆಹೋವನು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪಟ್ಟಣಗಳು. ದನಕುರಿಗಳ ಮೇವಿಗೆ ತಕ್ಕ ಪ್ರದೇಶವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ದನ ಕುರಿಗಳುಂಟು.5ಆದಕಾರಣ ನೀವು, ದಾಸರಾದ ನಮ್ಮ ಮೇಲೆ ದಯೆ ಇಟ್ಟು ನಮ್ಮನ್ನು ಯೊರ್ದನ್ ನದಿಯ ಆಚೆಗೆ ಬರಮಾಡಿದ ಈ ಪ್ರದೇಶವನ್ನೇ ಸ್ವತ್ತಾಗಿ ಕೊಡಬೇಕು>> ಎಂದು ಕೇಳಿಕೊಂಡರು.6ಮೋಶೆಯು ಗಾದ್ ಮತ್ತು ರೂಬೇನ್ ಸಂತಾನದವರಿಗೆ, <<ನಿಮ್ಮ ಸಹೋದರರು ಯದ್ಧಕ್ಕೆ ಹೋಗುವಾಗ ನೀವು ಅಲ್ಲೇ ಕುಳಿತುಕೊಂಡಿರಬೇಕೇನು?7ಯೆಹೋವನು ಇಸ್ರಾಯೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಏಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?8ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ತಂದೆಯರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.9ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.10ಆ ಕಾಲದಲ್ಲಿ ಯೆಹೋವನು ಕೋಪಗೊಂಡವನಾಗಿ ಪ್ರಮಾಣಮಾಡಿ,11<ಐಗುಪ್ತ ದೇಶದೊಳಗಿಂದ ಬಂದ ಈ ಜನರೊಳಗೆ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದುದರಿಂದ ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಪೂರ್ವಕವಾಗಿ ಕೊಟ್ಟ ದೇಶವನ್ನು, ಅವರೊಳಗೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರಲ್ಲಿ12ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನೂ ಮತ್ತು ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತು ಯಾರೂ ನೋಡುವುದೇ ಇಲ್ಲ> >> ಎಂದು ಖಂಡಿತವಾಗಿ ಹೇಳಿದನು.13ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ವತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು.14<<ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.15ನೀವು ಆತನನ್ನು ಹಿಂಬಾಲಿಸದೆ ಇರುವ ಕಾರಣ ಆತನು ಆ ಜನರನ್ನು ಮರುಭೂಮಿಯಲ್ಲಿ ಇರಿಸಿದರೆ, ಈ ಸಮಸ್ತ ಜನಾಂಗವನ್ನು ನೀವೇ ನಾಶ ಮಾಡುವಿರಿ>> ಎಂದು ಹೇಳಿದನು.16ಆಗ ಅವರು ಮೋಶೆಯ ಬಳಿಗೆ ಬಂದು, <<ನಾವು ಇಲ್ಲಿ ನಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ, ನಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನು ಕಟ್ಟಿಕೊಳ್ಳುವೆವು.17ನಾವಾದರೋ ಇಸ್ರಾಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೋತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ.18ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ವರೆಗೂ ನಾವು ನಮ್ಮ ಮನೆಗಳಿಗೆ ತಿರುಗಿ ಹೋಗುವುದಿಲ್ಲ.19ನಮಗೆ ಯೊರ್ದನ್ ನದಿಯ ಆಚೆ ಪೂರ್ವ ದಿಕ್ಕಿನಲ್ಲಿ ಸ್ವತ್ತನ್ನು ಅಪೇಕ್ಷಿಸುವುದಿಲ್ಲ>> ಎಂದರು.20ಅದಕ್ಕೆ ಮೋಶೆ ಅವರಿಗೆ, <<ನೀವು ಯೆಹೋವನ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಟರೆಲ್ಲರೂ ಯುದ್ಧಸನ್ನದ್ಧರಾಗಿ,21ಯೊರ್ದನ್ ನದಿಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ22ಯುದ್ಧಮಾಡಿ ತರುವಾಯ ನೀವು ತಿರುಗಿ ಬಂದು ಆತನ ದೃಷ್ಟಿಯಲ್ಲೂ, ಇಸ್ರಾಯೇಲರ ದೃಷ್ಟಿಯಲ್ಲೂ ನಿರ್ದೋಷಿಗಳಾಗಿರುವಿರಿ ಮತ್ತು ಈ ದೇಶವು ಯೆಹೋವನ ಸನ್ನಿಧಿಯಲ್ಲೇ ನಿಮಗೆ ಸ್ವತ್ತಾಗಿರುವುದು.23<<ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.24ನೀವು ನಿಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ, ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ ಕಟ್ಟಿಕೊಂಡ ತರುವಾಯ ನಿಮ್ಮ ಮಾತಿನ ಪ್ರಕಾರ ಮಾಡಿರಿ>> ಎಂದನು.25ಅದಕ್ಕೆ ಗಾದ್ಯರೂ ಮತ್ತು ರೂಬೇನ್ಯರೂ ಮೋಶೆಗೆ, <<ಸ್ವಾಮಿಯವರ ಅಪ್ಪಣೆಯ ಪ್ರಕಾರ ದಾಸರಾದ ನಾವು ಮಾಡುತ್ತೇವೆ ಎಂದರು.26ನಮ್ಮ ಮಕ್ಕಳು, ಹೆಂಡತಿಯರೂ, ದನಕುರಿಗಳು ನಮ್ಮ ಸಂಪತ್ತು ಇಲ್ಲೇ ಗಿಲ್ಯಾದ್ ದೇಶದ ಊರುಗಳಲ್ಲಿ ಇರಲಿ.27ನಿನ್ನ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರೂ ಸ್ವಾಮಿಯವರ ಅಪ್ಪಣೆಯ ಪ್ರಕಾರ ಯೆಹೋವನ ಮುಂದುಗಡೆಯಲ್ಲಿ ಹೊರಟು ನದಿಯನ್ನು ದಾಟಿ ಯುದ್ಧಮಾಡುವೆವು>> ಎಂದು ಉತ್ತರ ಕೊಟ್ಟರು.28ಆದಕಾರಣ ಮೋಶೆ ಅವರ ವಿಷಯವಾಗಿ ಮಹಾಯಾಜಕ ಎಲ್ಲಾಜಾರನಿಗೂ, ನೂನನ ಮಗನಾದ ಯೆಹೋಶುವನಿಗೂ ಇಸ್ರಾಯೇಲರ ಮತ್ತು ಗೋತ್ರಗಳ ಕುಲಾಧಿಪತಿಗಳಿಗೂ ಆಜ್ಞೆಮಾಡಿದನು.29ಮೋಶೆಯು ಅವರಿಗೆ, <<ಗಾದ್ಯರಲ್ಲಿಯೂ, ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ನದಿಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವನ್ನು ನೀವು ಸ್ವಾಧೀನಮಾಡಿಕೊಂಡಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವುದಕ್ಕೆ ಕೊಡಬೇಕು.30ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ದೇಶದಲ್ಲಿಯೇ ಅವರಿಗೆ ಸ್ವಾಸ್ತ್ಯವಾಗಬೇಕು>> ಎಂದು ಹೇಳಿದನು.31ಅದಕ್ಕೆ ಗಾದ್ಯರೂ ರೂಬೇನ್ಯರೂ ಉತ್ತರವಾಗಿ, <<ಯೆಹೋವನು ನಿನ್ನ ದಾಸರಾದ ನಮಗೆ ಆಜ್ಞಾಪಿಸಿದಂತೆಯೇ ಮಾಡುವೆವು.32ನಾವು ಯೆಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು, ಆಗ ಯೊರ್ದನ್ ನದಿಯ ಆಚೆಯೇ ನಮಗೆ ಸ್ವತ್ತು ದೊರಕಬೇಕು>> ಎಂದರು.33ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.34ಗಾದ್ಯನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.35ಆಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ,36ಬೇತ್‌ನಿಮ್ರಾ ಮತ್ತು ಬೇತ್ ಹಾರಾನಿನ ಸುತ್ತ ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನು ಕಟ್ಟಿಕೊಂಡರು.37ರೂಬೇನ್ಯರ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.38ಸಿಬ್ಮಾ ಎಂಬ ಊರುಗಳನ್ನೂ, ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಎಂಬವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.39ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.40ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.41ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.42ನೋಬಹನು ಯುದ್ಧಕ್ಕೆ ಹೊರಟು ಕೆನಾತ್ ಎಂಬ ಪಟ್ಟಣವನ್ನೂ ಮತ್ತು ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿ ಅದಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು.
33ಐಗುಪ್ತದೇಶದಿಂದ ಮೋವಾಬಿನವರೆಗಿನ ಪ್ರಯಾಣ
1ಮೋಶೆ ಮತ್ತು ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ:2ಮೋಶೆ ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರ ಪ್ರಯಾಣಗಳ ವಿವರಗಳನ್ನು ಬರೆದನು.3ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲರು ಐಗುಪ್ತ್ಯರ ಎದುರಿನಲ್ಲೇ ರಮ್ಸೇಸಿನಿಂದ ಹೊರಟರು.4ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು ಶಿಕ್ಷಿಸಿ, ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದ್ದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು.5ಇಸ್ರಾಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದುಕೊಂಡರು.6ಸುಕ್ಕೋತಿನಿಂದ ಹೊರಟು ಅರಣ್ಯದ ಅಂಚಿನಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು.7ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಪೂರ್ವದಲ್ಲಿ ಇಳಿದುಕೊಂಡರು.8ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾಮಿನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.9ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿಯೇ ಇಳಿದುಕೊಂಡರು.10ಏಲೀಮಿನಿಂದ ಹೊರಟು ಕೆಂಪು ಸಮುದ್ರದ ದಡದಲ್ಲಿ ಇಳಿದುಕೊಂಡರು.11ಕೆಂಪು ಸಮುದ್ರದಿಂದ ಹೊರಟು ಸೀನ್ ಮರುಭೂಮಿಯಲ್ಲಿ ಇಳಿದುಕೊಂಡರು.12ಸೀನ್ ಮರುಭೂಮಿಯಿಂದ ಹೊರಟು ದೊಪ್ಕದಲ್ಲಿ ಇಳಿದುಕೊಂಡರು.13ದೊಪ್ಕದಿಂದ ಹೊರಟು ಆಲೂಷಿನಲ್ಲಿ ಇಳಿದುಕೊಂಡರು.14ಆಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಸಿಕ್ಕಲಿಲ್ಲ.15ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.16ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.17ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು.18ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.19ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು.20ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.21ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.22ರಿಸ್ಸದಿಂದ ಹೊರಟು ಕೆಹೇಲಾತದಲ್ಲಿ ಇಳಿದುಕೊಂಡರು.23ಕೆಹೇಲಾತದಿಂದ ಹೊರಟು ಶೆಫೆರ್ ಬೆಟ್ಟದಲ್ಲಿ ಇಳಿದುಕೊಂಡರು.24ಶೆಫೆರ್ ಬೆಟ್ಟದಿಂದ ಹೊರಟು ಹರಾದದಲ್ಲಿ ಇಳಿದುಕೊಂಡರು.25ಹರಾದದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು.26ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು.27ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು.28ತೆರಹದಿಂದ ಹೊರಟು ಮಿತ್ಕದಲ್ಲಿ ಇಳಿದುಕೊಂಡರು.29ಮಿತ್ಕದಿಂದ ಹೊರಟು ಹಷ್ಮೋನದಲ್ಲಿ ಇಳಿದುಕೊಂಡರು.30ಹಷ್ಮೋನದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು.31ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು.32ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದುಕೊಂಡರು.33ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.34ಯೊಟ್ಬಾತದಿಂದ ಹೊರಟು ಅಬ್ರೋನದಲ್ಲಿ ಇಳಿದುಕೊಂಡರು.35ಅಬ್ರೋನದಿಂದ ಹೊರಟು ಎಚ್ಯೋನ್ ಗೆಬೆರಿನಲ್ಲಿ ಇಳಿದುಕೊಂಡರು.36ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು.37ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.38ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ನಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.39ಆರೋನನು ಹೋರ್ ಬೆಟ್ಟದಲ್ಲಿ ಸತ್ತಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು.40ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು.41ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.42ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು.43ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.44ಓಬೋತಿನಿಂದ ಹೊರಟು ಮೋವಾಬ್ಯರ ಗಡಿಯಲ್ಲಿರುವ ಯೊರ್ದನ್ ನದಿಯ ಆಚೆಯಿರುವ ಇಯ್ಯೀಮಿನಲ್ಲಿ ಇಳಿದುಕೊಂಡರು.45ಇಯ್ಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು.46ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.47ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೇಬೋವಿನ ಪೂರ್ವದಲ್ಲಿ ಇಳಿದುಕೊಂಡರು.48ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.49ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಯೊರ್ದನ್ ನದಿಯ ತೀರದಲ್ಲಿ ಇಳಿದುಕೊಂಡರು.ಕಾನಾನ್ ದೇಶವನ್ನು ಹಂಚಿಕೊಂಡುವ ಬಗ್ಗೆ ಆಜ್ಞೆ
50ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,51<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದಾಗ,52ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ, ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.53ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.54ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ, ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವತ್ತು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.55ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.56ಅದಲ್ಲದೆ ನಾನು ಅವರಿಗೆ ಏನು ಮಾಡಬೇಕೆಂದು ಯೋಚಿಸಿದೇನೋ ಹಾಗೆ ನಿಮಗೂ ಮಾಡುವೆನು.> >>
34ಕಾನಾನ್ ದೇಶದ ಮೇರೆಗಳು
1ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,2<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ಸಮಸ್ತ ಕಾನಾನ್ ದೇಶವೇ ನಿಮಗೆ ಸ್ವದೇಶವಾಗಿ ದೊರಕುವುದು.3ನೀವು ಅಲ್ಲಿ ಸೇರಿದಾಗ ಎದೋಮ್ಯರ ಗಡಿಗಳ ಬಳಿಯಲ್ಲಿರುವ ಚಿನ್ ಅರಣ್ಯವು ನಿಮ್ಮ ದಕ್ಷಿಣದ ಮೇರೆಯಾಗಿರಬೇಕು. ಆ ಮೇರೆಯ ಪೂರ್ವದಿಕ್ಕಿನಲ್ಲಿರುವ ಲವಣಸಮುದ್ರದ ಕೊನೆಯಿಂದ ಪ್ರಾರಂಭಿಸಬೇಕು.4ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೀಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರಬೇಕು. ಅದರ ಮೂಲೆ ಕಾದೇಶ್ ಬರ್ನೇಯದ ದಕ್ಷಿಣದ ಕಡೆಯಲ್ಲಿರಬೇಕು. ಅಲ್ಲಿಂದ ಅದು ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.5ಅಚ್ಮೋನಿನಿಂದ ಐಗುಪ್ತ ದೇಶದ ಹಳ್ಳಕ್ಕೆ ಬಂದು ಸಮುದ್ರದ ದಡದಲ್ಲಿ ಮುಗಿಯಬೇಕು.6ಪಶ್ಚಿಮ ದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ದೇಶದ ಮೇರೆಯಾಗಿರುವುದು.7ಉತ್ತರ ದಿಕ್ಕಿನ ಮೇರೆಗಾಗಿ ನೀವು ಮಹಾಸಮುದ್ರದಿಂದ,8ಹೋರ್ ಪರ್ವತದಿಂದ ಹಮಾತಿನವರೆಗೂ ಮತ್ತು ಅಲ್ಲಿಂದ ಚೆದಾದಿನ ಹತ್ತಿರಕ್ಕೆ ಇರುವುದು.9ಆ ಮೇಲೆ ಅದು ಜಿಫ್ರೋನಿಗೆ ಹೋಗಿ ಹಚರೇನಾನಿನ ಬಳಿಯಲ್ಲಿ ಮುಗಿಯಬೇಕು. ಇದು ನಿಮ್ಮ ಉತ್ತರ ದಿಕ್ಕಿನ ಮೇರೆಯಾಗಿರುವುದು.10ಪೂರ್ವದಿಕ್ಕಿನ ಮೇರೆಗಾಗಿ ಹಚರೇನಾನಿನಿಂದ ಶೆಫಾಮಿಗೆ ಗುರುತು ಹಾಕಬೇಕು.11ಶೆಫಾಮಿನಿಂದ ಅಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವದಲ್ಲಿರುವ ಬೆಟ್ಟಗಳಿಗೆ ಹೋಗಬೇಕು.12ಅಲ್ಲಿಂದ ಅದು ಯೊರ್ದನ್ ನದಿಗೆ ಇಳಿದು ಅದನ್ನು ಅನುಸರಿಸಿ ಲವಣಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು> >> ಎಂದನು.13ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೇಲರಿಗೆ, <<ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ. ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.14ರೂಬೇನ್ಯರ ಮಕ್ಕಳ ಗೋತ್ರವೂ, ಗಾದ್ಯರ ಮಕ್ಕಳ ಗೋತ್ರವೂ, ಮನಸ್ಸೆ ಕುಲದವರಲ್ಲಿ ಅರ್ಧಗೋತ್ರವೂ ತಮ್ಮ ಪೂರ್ವಿಕರ ಗೋತ್ರಗಳ ಪ್ರಕಾರವಾಗಿ ತಮ್ಮ ಸ್ವತ್ತನ್ನು ಹೊಂದಿದ್ದಾರೆ.15ಎರಡುವರೆ ಗೋತ್ರಗಳು ತಮ್ಮ ಸ್ವತ್ತನ್ನು ಯೊರ್ದನ್ ನದಿಯ ಆಚೆ ಯೆರಿಕೋ ಪಟ್ಟಣದ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ.>>ಕಾನಾನ್ ದೇಶವನ್ನು ಹಂಚಿಕೊಡುವುದಕ್ಕೆ ನೇಮಿಸಲ್ಪಟ್ಟವರ ಹೆಸರುಗಳು
16ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,17<<ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಯಾವುವೆಂದರೆ: ಮಹಾಯಾಜಕನಾದ ಎಲ್ಲಾಜಾರನು ಮತ್ತು ನೂನನ ಮಗನಾದ ಯೆಹೋಶುವನೂ.18ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲಾಧಿಪತಿಯೂ ಇವರೇ. ಇವರು ಕಾನಾನ್ ದೇಶದಲ್ಲಿ ತಮ್ಮ ತಮ್ಮ ಸ್ವತ್ತುಗಳನ್ನು ಹಂಚಿಕೊಡಬೇಕು.19ನೀವು ಆಯಾ ಕುಲಗಳಿಂದ ನೇಮಿಸಬೇಕಾದವರು ಯಾರೆಂದರೆ: ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,20ಸಿಮೆಯೋನ್ ಕುಲದಿಂದ ಅಮ್ಮಿಹೂದನ ಮಗ ಶೆಮೂವೇಲ್,21ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗ ಎಲೀದಾದ್,22ದಾನ್ ಕುಲದಿಂದ ಯೊಗ್ಲೀಯ ಮಗ ಬುಕ್ಕೀ ಕುಲಾಧಿಪತಿ,23ಯೋಸೇಫನ ವಂಶದವರಲ್ಲಿ: ಮನಸ್ಸೆ ಕುಲದಿಂದ ಏಫೋದನ ಮಗ ಹನ್ನೀಯೇಲ್ ಕುಲಾಧಿಪತಿ,24ಎಫ್ರಾಯೀಮ್ ಕುಲದಿಂದ ಶಿಫ್ಟಾನನ ಮಗ ಕೆಮೂವೇಲ್ ಕುಲಾಧಿಪತಿ,25ಜೆಬುಲೂನ್ ಕುಲದಿಂದ ಪರ್ನಾಕನ ಮಗ ಎಲೀಚಾಫಾನ್ ಕುಲಾಧಿಪತಿ,26ಇಸ್ಸಾಕಾರ್ ಕುಲದಿಂದ ಅಜ್ಜಾನನ ಮಗ ಪಲ್ಟೀಯೇಲ್ ಕುಲಾಧಿಪತಿ,27ಆಶೇರ್ ಕುಲದಿಂದ ಶೆಲೋಮಮೀಯ ಮಗ ಅಹೀಹೂದ್ ಕುಲಾಧಿಪತಿ,28ನಫ್ತಾಲಿ ಕುಲದಿಂದ ಅಮ್ಮಿಹೂದನ ಮಗ ಪೆದಹೇಲ್ ಕುಲಾಧಿಪತಿ ಇವರೇ.>>29ಕಾನಾನ್ ದೇಶದಲ್ಲಿ ಇಸ್ರಾಯೇಲರಿಗೆ ಅವರವರ ಸ್ವತ್ತುಗಳನ್ನು ಹಂಚಿಕೊಡುವುದಕ್ಕೆ ಯೆಹೋವನು ಇವರನ್ನೆಲ್ಲಾ ನೇಮಿಸಿದನು.
35ಲೇವಿಯರಿಗೆ ಕೊಡಲಾದ ಊರುಗಳು
1ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,2<<ಇಸ್ರಾಯೇಲರು ತಾವು ಹೊಂದುವ ಸ್ವತ್ತಿನಲ್ಲಿ ಕೆಲವು ಪಟ್ಟಣಗಳನ್ನೂ, ಆ ಪಟ್ಟಣಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.3ಆ ಪಟ್ಟಣಗಳು ಲೇವಿಯರ ವಾಸ ಸ್ಥಳವಾಗುವುದು. ಸುತ್ತಲಿರುವ ಭೂಮಿಗಳು ಅವರ ದನಕುರಿಗಳಿಗಾಗಿಯೂ ಮತ್ತು ಪಶುಗಳಿಗಾಗಿಯೂ ಇರುವವು.4ನೀವು ಲೇವಿಯರಿಗೆ ಕೊಡುವ ಪಟ್ಟಣಗಳು ಸುತ್ತಲಿನ ಭೂಮಿಯ ಪ್ರತಿಯೊಂದು ಪಟ್ಟಣಗಳ ಗೋಡೆಯಿಂದ ನಾಲ್ಕು ಕಡೆಯಲ್ಲಿಯೂ ಸಾವಿರ ಮೊಳದಷ್ಟು ವಿಸ್ತರಿಸಿಕೊಂಡಿರಬೇಕು.5ನೀವು ಪಟ್ಟಣದ ಹೊರಗಡೆ ಪೂರ್ವ ದಿಕ್ಕಿನಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ, ಅಳೆಯಬೇಕು. ಮಧ್ಯದಲ್ಲಿ ಪಟ್ಟಣಗಳಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.6ಮನುಷ್ಯನನ್ನು ಹತ್ಯೆಮಾಡಿದವರು ಆಶ್ರಯಕ್ಕಾಗಿ ಓಡಿ ಹೋಗುವುದಕ್ಕೋಸ್ಕರ ನೀವು ನೇಮಿಸುವ ಆರು ಆಶ್ರಯನಗರಗಳನ್ನೂ, ಬೇರೆ ನಲ್ವತ್ತೆರಡು ಪಟ್ಟಣಗಳನ್ನೂ ಅಂತು ನಲ್ವತ್ತೆಂಟು ಪಟ್ಟಣಗಳನ್ನು ಲೇವಿಯರಿಗೆ ಕೊಡಬೇಕು.7ನೀವು ಲೇವಿಯರಿಗೆ ಹುಲ್ಲುಗಾವಲುಗಳ ಸಂಗಡ ಕೊಡಬೇಕಾದ ಸಮಸ್ತ ಪಟ್ಟಣಗಳು ನಲ್ವತ್ತೆಂಟಾಗಿರಬೇಕು.8ಇಸ್ರಾಯೇಲರ ಸ್ವತ್ತಿನಲ್ಲಿ ಆಯಾ ಕುಲದ ಸ್ವತ್ತಿನ ಪ್ರಮಾಣಕ್ಕೆ ತಕ್ಕ ಹಾಗೆ ಹೆಚ್ಚಾದ ಜನರುಳ್ಳವರಿಂದ ಹೆಚ್ಚಾಗಿಯೂ, ಕಡಿಮೆಯಾದ ಜನರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.>>ಆಶ್ರಯ ಪಟ್ಟಣಗಳು
9ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,10<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ,11ಆಶ್ರಯ ಸ್ಥಾನಗಳಾಗುವುದಕ್ಕೆ ಪಟ್ಟಣಗಳನ್ನು ನೇಮಿಸಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.12ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು.13ಹೀಗೆ ಆರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ನೇಮಿಸಬೇಕು.14ನೀವು ಯೊರ್ದನ್ ನದಿಯ ಆಚೆಯಲ್ಲಿ ಮೂರು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ನೇಮಿಸಬೇಕು. ಅವು ಆಶ್ರಯದ ಪಟ್ಟಣಗಳಾಗಿ ಇರಬೇಕು.15ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಾಯೇಲನಾಗಲಿ, ಪರದೇಶದವನಾಗಲಿ ಮತ್ತು ನಿಮ್ಮಲ್ಲಿ ಇಳಿದುಕೊಂಡವನಾಗಲಿ ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಹೊಂದಬಹುದು.16<< <ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು.17ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.18ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.19ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.20ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ,21ಇಲ್ಲವೆ ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಬೇಕು.22<< <ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಆಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವುದರಿಂದಾಗಲಿ,23ಕೊಲ್ಲುವಷ್ಟು ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸುವುದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಅಭಿಪ್ರಾಯವಿಲ್ಲದೆಯೂ ಇದ್ದ ಪಕ್ಷಕ್ಕೆ,24ಸಭೆಯವರು ಹತ್ಯೆಮಾಡಿದವನಿಗೂ, ಹತವಾದವನ ಸಮೀಪಬಂಧುವಿಗೂ ಈ ಸಂಗತಿಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.25ಸಭೆಯು ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.26<< <ಆ ಹತ್ಯೆಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದು ಆಶ್ರಯಪಟ್ಟಣದ ಮೇರೆಯ ಹೊರಗೆ ಹೋಗಿರುವಾಗ,27ಹತವಾದವನ ಸಮೀಪಬಂಧುವು ಅವನನ್ನು ಆಶ್ರಯಪಟ್ಟಣದ ಹೊರಗೆ ಕಂಡು ಕೊಂದುಹಾಕಿದರೆ ಅವನು ಕೊಲೆಪಾತಕನಾಗುವುದಿಲ್ಲ.28ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯ ಪಟ್ಟಣದೊಳಗೆ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.29<< <ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.30ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.31<< <ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.32ನೀವು ಆಶ್ರಯಪಟ್ಟಣಕ್ಕೆ ಓಡಿಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.33<< <ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.34ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.> >>
36ಸ್ತ್ರೀಯರು ಮತ್ತು ಆಸ್ತಿಯ ಬಾಧ್ಯತೆ
1ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನಾದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಮತ್ತು ಇಸ್ರಾಯೇಲರ ಕುಲಾಧಿಪತಿಗಳ ಬಳಿಗೆ ಬಂದು,2<<ದೇಶವನ್ನು ಚೀಟುಹಾಕಿ ಇಸ್ರಾಯೇಲರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವತ್ತನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕು ಎಂದು ಅಪ್ಪಣೆಮಾಡಿದನು.3ಹೀಗಿರಲು ಅವರು ಇಸ್ರಾಯೇಲರ ಬೇರೆ ಕುಲದವರಿಗೆ ಮದುವೆಯಾದ ಪಕ್ಷಕ್ಕೆ ಅವರ ಸ್ವತ್ತು ನಮ್ಮ ಕುಲದಿಂದ ತೆಗೆಯಲ್ಪಟ್ಟು ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುವುದು. ಆದುದರಿಂದ ನಮ್ಮ ಸ್ವತ್ತಿಗೆ ನಷ್ಟವುಂಟಾಗುವುದು.4ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು>> ಎಂದು ಹೇಳಿದರು.5ಆಗ ಮೋಶೆಯು ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರಿಗೆ, <<ಯೋಸೇಫನ ಕುಲದವರು ಹೇಳುವ ಮಾತು ನ್ಯಾಯವಾಗಿದೆ.6ಆದಕಾರಣ ಯೆಹೋವನು ಚಲ್ಪಹಾದನ ಹೆಣ್ಣುಮಕ್ಕಳ ವಿಷಯವಾಗಿ ಅಜ್ಞಾಪಿಸಿದ್ದೇನೆಂದರೆ, <ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕು> ಎಂಬುದೇ.7ಇಸ್ರಾಯೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲರೆಲ್ಲರೂ ತಮ್ಮತಮ್ಮ ಕುಲಗಳ ಸ್ವತ್ತನ್ನು ಹೊಂದಿಕೊಂಡೇ ಇರಬೇಕು.8ಇದಕ್ಕಾಗಿ ಇಸ್ರಾಯೇಲರ ವಂಶದಲ್ಲಿ ಸ್ವತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿಯೇ ಮದುವೆ ಮಾಡಿಕೊಳ್ಳಬೇಕು.9ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲರ ಪ್ರತಿಯೊಂದು ಕುಲವು ತನ್ನ ಸ್ವತ್ತನ್ನು ಹೊಂದಿಕೊಂಡೇ ಇರುವುದು>> ಎಂದು ಆಜ್ಞಾಪಿಸಿದನು.10ಚಲ್ಪಹಾದನ ಹೆಣ್ಣುಮಕ್ಕಳು ಯೆಹೋವನ ಆಜ್ಞಾನುಸಾರವೇ ನಡೆದುಕೊಂಡರು.11ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬುವವರು ಮನಸ್ಸೆಯ ಕುಲದವರನ್ನು ಮದುವೆಮಾಡಿಕೊಂಡರು.12ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸ್ವತ್ತು ತಂದೆಯ ಕುಲದಲ್ಲಿಯೇ ಉಳಿಯಿತು.13ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.
ಧರ್ಮೋಪದೇಶಕಾಂಡ
1ಮೋಶೆಯು ಮೂರು ಉಪದೇಶಾತ್ಮಕ ಉಪನ್ಯಾಸಗಳನ್ನು ಮಾಡಿದ ಕಾಲ ಮತ್ತು ಸ್ಥಳ
1 ಯೊರ್ದನ್ ನದಿಯ ಆಚೆ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಎಂಬ ಸ್ಥಳಗಳ ನಡುವೆ, ಅರಣ್ಯದಲ್ಲಿ ಆರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲರೆಲ್ಲರಿಗೆ ಮಾಡಿದ ಉಪದೇಶ ಮತ್ತು ಉಪನ್ಯಾಸಗಳು.2ಹೋರೇಬಿನಿಂದ ಸೇಯೀರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್‌ಬರ್ನೇಯದ ತನಕ ಹನ್ನೊಂದು ದಿನದ ಪ್ರಯಾಣ.3ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟ ನಲ್ವತ್ತನೆಯ ವರ್ಷದ, ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರಾಯೇಲರಿಗೆ ತಿಳಿಸಿದನು.4ಯೆಹೋವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ, ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯವೇ ಮೋಶೆಯು ಇದನ್ನೆಲ್ಲಾ ತಿಳಿಸಿದನು.ಮೋಶೆ ಮಾಡಿದ ಮೊದಲನೆಯ ಉಪನ್ಯಾಸ
5ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆಯು ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿ ಹೀಗೆ ಹೇಳಿದನು:6<<ಹೋರೇಬಿನಲ್ಲಿ ನಮ್ಮ ದೇವರಾದ ಯೆಹೋವನು ನಮಗೆ, <ನೀವು ಈ ಬೆಟ್ಟದ ಬಳಿಯಲ್ಲಿ ವಾಸಿಸಿದ್ದು ಸಾಕು.7ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.8ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ> >> ಎಂದು ಅಜ್ಞಾಪಿಸಿದನು.ನಾಯಕರನ್ನು ನೇಮಿಸಿದ್ದನ್ನು ನೆನಪಿಸಿದ್ದು
9ಆ ಕಾಲದಲ್ಲಿ ನಾನು ನಿಮ್ಮ ಸಂಗಡ ಮಾತನಾಡಿ, <<ನಿಮ್ಮ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ.10ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಧಿಕ ಸಂಖ್ಯೆಯಲ್ಲಿ ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿದ್ದೀರಿ.11ನೀವು ಈಗ ಇರುವುದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ, ತಾನು ವಾಗ್ದಾನಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.12ಆದರೆ ನಿಮ್ಮಿಂದಾಗುವ ತೊಂದರೆಗಳನ್ನೂ, ಹೊಣೆಯನ್ನು ಮತ್ತು ವ್ಯಾಜ್ಯಗಳನ್ನೂ ನಾನೊಬ್ಬನೇ ನಿಭಾಯಿಸುವುದು ಹೇಗೆ?13ಆದುದರಿಂದ ನೀವು ಪ್ರತಿಯೊಂದು ಕುಲದಿಂದ ಬುದ್ಧಿವಿವೇಕಗಳಿಂದ ಪ್ರಸಿದ್ಧರಾದ ಪುರುಷರನ್ನು ಆರಿಸಿಕೊಳ್ಳಿರಿ. ನಾನು ಅವರನ್ನು ನಿಮಗೆ ಅಧಿಪತಿಗಳನ್ನಾಗಿ ನೇಮಿಸುವೆನು>> ಎಂದು ಹೇಳಿದೆನು.14ಅದಕ್ಕೆ ನೀವು, <<ನಿನ್ನ ಆಲೋಚನೆಯಂತೆ ನಡೆಯುವುದು ಹಿತವಾದದ್ದೇ>> ಎಂದು ಉತ್ತರಕೊಟ್ಟಿರಿ.15ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ, ಬುದ್ಧಿವಂತರನ್ನು ಆರಿಸಿಕೊಂಡು ಒಂದೊಂದು ಕುಲದಲ್ಲಿ ಸಾವಿರ ಜನರಿಗೆ ಒಬ್ಬರಂತೆ, ನೂರು ಜನರಿಗೆ ಒಬ್ಬರಂತೆ, ಐವತ್ತು ಜನರಿಗೆ ಒಬ್ಬರಂತೆ ಮತ್ತು ಹತ್ತು ಜನರಿಗೆ ಒಬ್ಬರಂತೆ ಅಧಿಕಾರಿಗಳನ್ನಾಗಿಯೂ ಮತ್ತು ಉಪ ಅಧಿಕಾರಿಗಳನ್ನಾಗಿಯೂ ನೇಮಿಸಿದೆನು.16ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ, <<ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅವರು ಇಸ್ರಾಯೇಲರೊಡನೆ ವ್ಯಾಜ್ಯವಾಡಿದರೂ, ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು.17ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು>> ಎಂದು ಹೇಳಿದೆನು.18ಅದಲ್ಲದೆ ನೀವು ಮಾಡಬೇಕಾದ ಎಲ್ಲಾ ಕಾರ್ಯಗಳ ವಿಷಯದಲ್ಲಿಯೂ ನಾನು ಆ ಕಾಲದಲ್ಲಿ ನಿಮಗೆ ಆಜ್ಞೆಕೊಟ್ಟೆನು.ಗೂಢಚಾರರನ್ನು ಕಳುಹಿಸಿದ್ದನ್ನು ನೆನಪಿಸಿದ್ದು
19ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು.20ಆಗ ನಾನು, <<ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಅಮೋರಿಯರ ಬೆಟ್ಟದ ಸೀಮೆಯ ಹತ್ತಿರಕ್ಕೆ ಬಂದಿದ್ದೀರಿ.21ನಿಮ್ಮ ದೇವರಾದ ಯೆಹೋವನು ಆ ದೇಶವನ್ನು ನಿಮಗೇ ಕೊಟ್ಟಿದ್ದಾನೆ; ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೇಳಿದಂತೆ ಆ ಬೆಟ್ಟವನ್ನು ಹತ್ತಿ ಸ್ವಾಧೀನಮಾಡಿಕೊಳ್ಳಿರಿ; ನೀವು ಭಯಪಡದೆ ಧೈರ್ಯವಾಗಿಯೇ ಇರಬೇಕು>> ಎಂದು ಹೇಳಿದೆನು.22ಆಗ ನೀವೆಲ್ಲರೂ ನನ್ನ ಬಳಿಗೆ ಬಂದು, <<ನಮಗಿಂತ ಮುಂದಾಗಿ ಜನರನ್ನು ಕಳುಹಿಸುವೆವು. ಅವರು ನಮಗೋಸ್ಕರ ಆ ದೇಶವನ್ನು ಪರೀಕ್ಷಿಸಿ ನೋಡಿ, ನಾವು ಹತ್ತಿ ಹೋಗಬೇಕಾದ ದಾರಿಯ ವಿಷಯದಲ್ಲೂ ಮತ್ತು ಸೇರಬೇಕಾದ ಊರುಗಳ ವಿಷಯದಲ್ಲೂ ನಮಗೆ ವರ್ತಮಾನ ತಿಳಿಸಲಿ>> ಎಂದು ಹೇಳಿದಿರಿ.23ಅದು ಒಳ್ಳೆಯ ಆಲೋಚನೆಯೆಂದು ನಾನು ತಿಳಿದುಕೊಂಡು ನಿಮ್ಮಲ್ಲಿ ಕುಲಕ್ಕೆ ಒಬ್ಬೊಬ್ಬನಂತೆ ಹನ್ನೆರಡು ಜನರನ್ನು ಆರಿಸಿಕೊಂಡೆನು.24ಅವರು ಹೋಗಿ ಆ ಬೆಟ್ಟದ ಸೀಮೆಯನ್ನು ಹತ್ತಿ, ಎಷ್ಕೋಲ್ ಎಂಬ ತಗ್ಗಿನ ಬಳಿಗೆ ಬಂದು ಆ ಪ್ರದೇಶದಲ್ಲಿ ಸಂಚರಿಸಿ ನೋಡಿದರು.25ಅವರು ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ, <<ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶ>> ಎಂದು ನಮಗೆ ತಿಳಿಸಿದರು.ಕರ್ತನಿಗೆ ವಿರುದ್ಧ ದಂಗೆ ಎದ್ದದನ್ನು ನೆನಪಿಸಿದ್ದು
26ಆದರೂ ನೀವು ಬೆಟ್ಟವನ್ನು ಹತ್ತಿ ನೋಡಲು ಇಷ್ಟಪಡದೆ ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿದಿರಿ.27ನೀವು ನಿಮ್ಮ ಡೇರೆಗಳಲ್ಲಿ ಗುಣುಗುಟ್ಟುತ್ತಾ, <<ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ.28ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, <ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ> ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ>> ಅಂದುಕೊಳ್ಳುತ್ತಿದ್ದಿರಿ.29ಅದಕ್ಕೆ ನಾನು, <<ಕಳವಳಪಡಬೇಡಿರಿ, ಅವರಿಗೆ ಭಯಪಡಬೇಡಿರಿ.30ನಿಮ್ಮ ಮುಂದೆ ಮಾರ್ಗದರ್ಶಕನಾಗಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ, ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮವನಾಗಿ ಯುದ್ಧಮಾಡುವನು.31ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಮುನ್ನಡೆಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ?>> ಎಂದು ನಿಮಗೆ ಹೇಳಿದೆನು.32ಆದರೂ ನೀವು ನಿಮ್ಮ ದೇವರಾದ ಯೆಹೋವನನ್ನು ನಂಬಲೇ ಇಲ್ಲ.33ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ, ದಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ರಾತ್ರಿಯಲ್ಲಿ ಬೆಂಕಿಯೋಪಾದಿಯಲ್ಲಿಯೂ ಮತ್ತು ಹಗಲಿನಲ್ಲಿ ಮೇಘದೋಪಾದಿಯಲ್ಲಿಯೂ ನಿಮ್ಮ ಮಾರ್ಗದಲ್ಲಿ ನಿಮ್ಮನ್ನು ಮುನ್ನಡೆಸಿದ ದೇವರನ್ನು ನೀವು ನಂಬಲಿಲ್ಲ.34ಯೆಹೋವನು ನಿಮ್ಮ ಮಾತುಗಳನ್ನು ಕೇಳಿ ಕೋಪಗೊಂಡನು.35ಆತನು, <<ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದ ಆ ಒಳ್ಳೇ ದೇಶವನ್ನು ಈ ದುಷ್ಟ ಸಂತತಿಯವರಲ್ಲಿ ಯಾರೂ ನೋಡುವುದಿಲ್ಲ>> ಎಂದು ಪ್ರಮಾಣಮಾಡಿದನು.36ಮತ್ತು ಯೆಹೋವನು <<ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ, ಅವನೇ ಅದನ್ನು ನೋಡುವನು. ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಮತ್ತು ಅವನ ಸಂತತಿಯವರಿಗೂ ಕೊಡುವೆನು>> ಎಂದು ಹೇಳಿದನು.37ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, <<ನೀನೂ ಆ ದೇಶಕ್ಕೆ ಸೇರುವುದಿಲ್ಲ;38ಆದರೆ ನಿನ್ನ ಮುಂದೆ ನಿಂತಿರುವ ನಿನ್ನ ಸೇವಕನು, ನೂನನ ಮಗನೂ ಆದ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲರಿಗೆ ಆ ದೇಶವನ್ನು ಸ್ವಾಧೀನಪಡಿಸುವನು. ಆದುದರಿಂದ ಅವನನ್ನು ಧೈರ್ಯಗೊಳಿಸು.39ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಹಾಗು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು. ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.40ನೀವಾದರೋ ಹಿಂದಿರುಗಿ ಕೆಂಪು ಸಮುದ್ರದ ಮಾರ್ಗವನ್ನು ಹಿಡಿದು ಅರಣ್ಯಕ್ಕೆ ಹೊರಟುಹೋಗಿರಿ>> ಎಂದು ಆಜ್ಞಾಪಿಸಿದನು.41ಅದಕ್ಕೆ ನೀವು, <<ನಾವು ಯೆಹೋವನಿಗೆ ದ್ರೋಹಿಗಳಾದೆವು. ಆದರೂ ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಾವೇ ಈಗ ಆ ಬೆಟ್ಟದ ಸೀಮೆಯನ್ನು ಹತ್ತಿ ಯುದ್ಧಮಾಡುವೆವು>> ಎಂದು ಉತ್ತರಕೊಟ್ಟಿರಿ. ಮತ್ತು ನೀವೆಲ್ಲರೂ ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು, ಆ ಬೆಟ್ಟದ ಸೀಮೆಯನ್ನು ಹತ್ತಿ ಜಯಿಸುವುದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವುದಕ್ಕಿದ್ದಿರಿ.42ಆದರೆ ಯೆಹೋವನು ನನಗೆ, <<ನಾನು ಇವರ ಮಧ್ಯದಲ್ಲಿ ಇರುವುದಿಲ್ಲವಾದುದರಿಂದ ಇವರು ಸೋತುಹೋಗುವರು. ಇವರು ಯುದ್ಧಮಾಡಲೂ ಬಾರದು, ಆ ಬೆಟ್ಟದ ಸೀಮೆಗೆ ಹೋಗಲೂ ಬಾರದು ಎಂದು ಇವರಿಗೆ ಆಜ್ಞಾಪಿಸು>> ಎಂದು ಹೇಳಿದನು.43ನಾನು ಆ ಮಾತನ್ನು ನಿಮಗೆ ತಿಳಿಸಿದರೂ, ನೀವು ಕಿವಿಗೊಡದೆ ಯೆಹೋವನ ಆಜ್ಞೆಯನ್ನು ತಾತ್ಸಾರಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.44ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದ ವರೆಗೂ ಬೆನ್ನಟ್ಟಿ ಸಂಹರಿಸಿದರು.45ನೀವು ಹಿಂದಿರುಗಿ ಬಂದು ಯೆಹೋವನ ಮುಂದೆ ಗೋಳಾಡಿದಾಗ ಆತನು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ ಮತ್ತು ರಕ್ಷಿಸಲೂ ಇಲ್ಲ.46ಆ ಮೇಲೆ ನೀವು ಕಾದೇಶಿನಲ್ಲಿ ಬಹುಕಾಲ ವಾಸವಾಗಿದ್ದಿರಿ ಎಂದು ಹೇಳಿದನು.
2ಮರುಭೂಮಿಯಲ್ಲಿನ ಅಲೆದಾಟಗಳನ್ನು ನೆನಪಿಸಿದ್ದು
1ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.2ಆ ಮೇಲೆ ಯೆಹೋವನು ನನಗೆ,3<<ನೀವು ಈ ಬೆಟ್ಟದ ಸೀಮೆಯನ್ನು ಸುತ್ತಿದ್ದು ಸಾಕು; ಉತ್ತರದಿಕ್ಕಿಗೆ ತಿರುಗಿಕೊಳ್ಳಿರಿ.4ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.5ನಾನು ಸೇಯೀರ್ ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.6ನೀವು ಅಲ್ಲಿ ಹಣವನ್ನು ಕೊಟ್ಟು ಆಹಾರಪದಾರ್ಥಗಳನ್ನು ತಿನ್ನಬೇಕು; ನೀರನ್ನು ಕೊಂಡುಕೊಂಡು ಕುಡಿಯಬೇಕು.7ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ> >> ಎಂದು ಹೇಳಿದನು.8ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರಿಗೆ ಗೊತ್ತಾಗದಂತೆ ಎಚ್ಚರಿಕೆಯಿಂದ ಅರಾಬದ ಮಾರ್ಗವನ್ನು ಬಿಟ್ಟು ಏಲತ್ ಮತ್ತು ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.9ಆಗ ಯೆಹೋವನು ನನಗೆ, <<ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ>> ಎಂದು ಆಜ್ಞಾಪಿಸಿದನು.10ಏಮಿಯರು ಮೊದಲು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕೀಮ್ಯರಂತೆ ಎತ್ತರವಾದ ಪುರುಷರಾಗಿದ್ದರು.11ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಯರು ಅವರನ್ನು ಏಮಿಯರೆಂದು ಹೇಳುತ್ತಾರೆ.12ಹೋರಿಯರು ಸಹ ಪೂರ್ವಕಾಲದಲ್ಲಿ ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು.13ಆಗ ನಾನು, <<ಎದ್ದು ಜೆರೆದ್ ಹಳ್ಳವನ್ನು ದಾಟಿರಿ>> ಎಂದು ಹೇಳಲು ನಾವು ಜೆರೆದ್ ಹಳ್ಳವನ್ನು ದಾಟಿದೆವು.14ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.15ಯೆಹೋವನ ಹಸ್ತವು ಅವರಿಗೆ ವಿರುದ್ಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.16ಆ ಕಾಲದಲ್ಲಿ ಯುದ್ಧನಿಪುಣರಾಗಿದ್ದ ಸೈನಿಕರೆಲ್ಲರೂ ಸತ್ತುಹೋದರು.17ಆಗ ಯೆಹೋವನು ನನ್ನೊಂದಿಗೆ ಮಾತನಾಡಿ ನನಗೆ,18<<ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದೀರಿ.19ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.>>20ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಹೇಳುತ್ತಾರೆ.21ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕ್ಯರಂತೆ ಎತ್ತರವಾದ ಪುರುಷರೂ ಆಗಿದ್ದರು.22ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,23ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು.ಹೆಷ್ಬೋನಿನ ಅರಸನಾದ ಸೀಹೋನನ ಅಪಜಯ
24<<ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತುಹೋಗುವನು, ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಾನು ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.25ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು>> ಎಂದು ಹೇಳಿದನು.26ಆಗ ನಾನು ಕೆದೇಮೋತಿನ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,27<<ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.28ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಮತ್ತು ಕುಡಿಯಲಿಕ್ಕೆ ನೀರನ್ನೂ ಕೊಡಿರಿ.29ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ>> ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.30ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.31ತರುವಾಯ ಯೆಹೋವನು ನನಗೆ, <<ಈಗ ನಾನು ಸೀಹೋನನನ್ನೂ ಮತ್ತು ಅವನ ದೇಶವನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಮಾಡಿರಿ>> ಎಂದು ಹೇಳಿದನು.32ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಜಿಗೆ ಹೊರಟುಬಂದನು.33ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ, ಅವನ ಮಕ್ಕಳನ್ನೂ ಮತ್ತು ಜನರೆಲ್ಲರನ್ನೂ ಸಂಹರಿಸಿದೆವು.34ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನು ಮತ್ತು ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.35ಪಶುಗಳನ್ನು ಮಾತ್ರ ಉಳಿಸಿ ನಮ್ಮ ಸ್ವಂತಕ್ಕಾಗಿ ತೆಗೆದುಕೊಂಡು ಊರುಗಳನ್ನು ಸೂರೆಮಾಡಿಬಿಟ್ಟೆವು.36ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.37ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇ ಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನು.
3ಅರಸನಾದ ಓಗನ ಅಪಜಯ
1ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಮೇಲಕ್ಕೆ ಹೋದಾಗ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈ ಊರಿಗೆ ಹೊರಟುಬಂದನು.2ಆಗ ಯೆಹೋವನು ನನಗೆ, <<ಅವನಿಗೆ ಭಯಪಡಬೇಡ; ನಾನು ಅವನನ್ನೂ, ಅವನ ಸಮಸ್ತ ಜನರನ್ನೂ ಮತ್ತು ದೇಶವನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕು>> ಎಂದು ಆಜ್ಞಾಪಿಸಿದನು.3ಬಾಷಾನಿನ ಅರಸನಾದ ಓಗನೂ ಅವನ ಜನರೆಲ್ಲರೂ ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಯೆಹೋವನು ಮಾಡಲಾಗಿ ಅವರಲ್ಲಿ ಒಬ್ಬರಾದರೂ ಉಳಿಯದಂತೆ ಅವರನ್ನು ಹತಮಾಡಿದೆವು.4ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದೇ ಇದ್ದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.5ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ, ಕದಗಳಿಂದಲೂ, ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು.6ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದಂತೆ ಇವುಗಳಿಗೂ ಮಾಡಿದೆವು. ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಸಂಪೂರ್ಣವಾಗಿ ನಾಶಮಾಡಿದೆವು.7ಪಶುಗಳನ್ನು ಮಾತ್ರ ಉಳಿಸಿ ಸ್ವಂತಕ್ಕೆ ತೆಗೆದುಕೊಂಡು ಊರುಗಳನ್ನೆಲ್ಲಾ ಸೂರೆಮಾಡಿಬಿಟ್ಟೆವು.8ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ, ಯೊರ್ದನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.9(ಹೆರ್ಮೋನ್ ಪರ್ವತಕ್ಕೆ ಚೀದೋನ್ಯರು ಸಿರ್ಯೋನ್ ಎಂದೂ ಮತ್ತು ಅಮೋರಿಯರು ಸೆನೀರ್ ಎಂದೂ ಕರೆಯುತ್ತಿದ್ದರು.)10ಹೀಗೆ ಮೀಶೊರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಗಿಲ್ಯಾದ್ ಸೀಮೆಯನ್ನೂ, ಓಗನ ರಾಜ್ಯವಾದ ಸಲ್ಕಾ ಮತ್ತು ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.11(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)ದೇಶದ ಹಂಚಿಕೆ
12ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದ ವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು.13ಗಿಲ್ಯಾದಿನ ಮಿಕ್ಕ ಭಾಗವನ್ನೂ ಓಗನ ರಾಜ್ಯವಾಗಿದ್ದ ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ದೇಶವನ್ನೂ ಮನಸ್ಸೆ ಕುಲದ ಅರ್ಧ ಜನರಿಗೆ ಕೊಟ್ಟೆನು.14(ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.)15ನಾನು ಗಿಲ್ಯಾದ್ ದೇಶವನ್ನು ಮಾಕೀರನಿಗೂ ಗಿಲ್ಯಾದ್ ಮೊದಲುಗೊಂಡು (ದಕ್ಷಿಣದ) ಅರ್ನೋನ್ ತಗ್ಗಿನ ವರೆಗೂ,16(ಪೂರ್ವದ) ಯಬ್ಬೋಕ್ ನದಿಯ ವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ (ದಕ್ಷಿಣ) ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ನದಿಯು ಅವರ (ಪೂರ್ವದಿಕ್ಕಿನವರೆಗೆ) ಮೇರೆ.17ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ.18ಆ ಕಾಲದಲ್ಲಿ ನಾನು ನಿಮಗೆ, <<ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವತ್ತಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಸೈನಿಕರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಹೊರಟು ಹೊಳೆ ದಾಟಿ ಹೋಗಬೇಕು.19ನಿಮಗೆ ಬಹಳ ದನಕುರಿಗಳು ಉಂಟೆಂಬುದನ್ನು ನಾನು ಬಲ್ಲೆ. ನಿಮ್ಮ ದೇವರಾದ ಯೆಹೋವನು ಯೊರ್ದನ್ ನದಿಯ ಆಚೆ ನಿಮ್ಮ ಸಹೋದರರಿಗೆ ಕೊಡುವ ದೇಶವು ಅವರಿಗೆ ಸ್ವಾಧೀನವಾಗುವವರೆಗೆ ನಿಮ್ಮ ಹೆಂಡತಿ ಮಕ್ಕಳೂ, ದನಕುರಿಗಳೂ ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೇ ಇರಲಿ.20ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವತ್ತಿಗೆ ಹಿಂತಿರುಗಿ ಬರಬಹುದು>> ಎಂದು ಆಜ್ಞಾಪಿಸಿದೆನು.21ಆ ಕಾಲದಲ್ಲಿ ನಾನು ಯೆಹೋಶುವನಿಗೆ, <<ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ನದಿ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು.22ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪರವಾಗಿ ಯುದ್ಧಮಾಡುವನು>> ಎಂದು ಆಜ್ಞಾಪಿಸಿದೆನು.ಮೋಶೆಯು ಯೊರ್ದನ್ ನದಿಯನ್ನು ದಾಟಲು ನಿಷೇಧವೇರಿದ್ದು
23ಆ ಕಾಲದಲ್ಲಿ ನಾನು ಯೆಹೋವನಿಗೆ, <<ಕರ್ತನಾದ ಯೆಹೋವನೇ, ನೀನು ನಿನ್ನ ಮಹತ್ವವನ್ನೂ, ಭುಜಬಲವನ್ನೂ ನಿನ್ನ ದಾಸನಿಗೆ ತೋರಿಸಲಾರಂಭಿಸಿದಿ.24ನೀನು ನಡಿಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಬೇರೆ ಯಾವ ದೇವರು ನಡೆಸಲಾರನು?25ಕರ್ತನೇ, ನಾನೂ ಈ ನದಿಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ, ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ>> ಎಂದು ಬಿನ್ನವಿಸಿದೆನು.26ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ, <<ಸಾಕು, ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತನಾಡಬೇಡ; ನೀನು ಯೊರ್ದನ್ ನದಿಯನ್ನು ದಾಟಬಾರದು.27ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ ತುದಿಯಲ್ಲಿ ನಿಂತು, ನಾಲ್ಕು ದಿಕ್ಕುಗಳಲ್ಲಿ ಸುತ್ತಲೂ ಇರುವ ದೇಶವನ್ನು ಕಣ್ಣು ತುಂಬಾ ನೋಡಬಹುದು.28ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಈ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು>> ಎಂದು ಉತ್ತರಕೊಟ್ಟನು.29ಆಗ ನಾವು ಬೇತ್‍ಪೆಗೋರಿಗೆ ಮುಂದೆ ಇದ್ದ ಕಣಿವೆಯಲ್ಲಿ ವಾಸವಾಗಿದ್ದೆವು.
4ಇಸ್ರಾಯೇಲರು ದೇವರಿಗೆ ವಿಧೇಯರಾಗಿರಬೇಕೆಂಬ ಕರೆ
1ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.2ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.3ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ.4ನಿಮ್ಮ ದೇವರಾದ ಯೆಹೋವನನ್ನು ನೀವು ನಂಬಿ ನಡೆದುದರಿಂದ ನೀವಾದರೋ ಇಂದಿನವರೆಗೂ ಉಳಿದಿದ್ದೀರಿ.5ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.6ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, <<ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ>> ಎಂದು ಹೇಳುವರು.7ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು?8ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು?9ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.10ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, <<ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ>> ಎಂದು ಹೇಳಿದನು.11ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಕತ್ತಲೂ, ಮೋಡವೂ, ಕಾರ್ಗತ್ತಲೂ ಕವಿದು ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿಯಿತು.12ಆಗ ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದನು. ಆತನು ಮಾತನಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸಲ್ಲಿಲ್ಲ.13ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.14ನೀವು ನದಿ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದನ್ನು ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು.ವಿಗ್ರಹಾರಾಧನೆ ಮಾಡಬಾರದೆಂಬ ಆಜ್ಞಾವಿಧಿಗಳು
15ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.16ನೀವು ಸ್ತ್ರೀಪುರುಷರ ರೂಪವನ್ನಾಗಲಿ,17ಭೂಮಿಯ ಮೇಲೆ ಸಂಚರಿಸುವ ಮೃಗದ ರೂಪವನ್ನಾಗಲಿ, ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲಿ,18ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪವನ್ನಾಗಲಿ ಮತ್ತು ಭೂಮಿಯ ಕೆಳಗಣ ನೀರಿನಲ್ಲಿರುವ ಮೀನಿನ ರೂಪವನ್ನಾಗಲಿ ದೇವರ ಸ್ವರೂಪವೆಂದು ಮಾಡಿಕೊಂಡು ಭ್ರಷ್ಟರಾಗಬಾರದು.19ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.20ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.21ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ,22ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ನದಿದಾಟಿ ಆ ಒಳ್ಳೆಯ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.23ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.24ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.25ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ,26ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.27ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.28ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.29ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.30ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.31ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ.ಯೆಹೋವನು ಮಾತ್ರವೇ ಏಕೈಕ ದೇವರು
32ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.33ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?34ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.35ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ.36ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.37ಆತನು ನಿಮ್ಮ ಪೂರ್ವಿಕರನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನು ಆರಿಸಿಕೊಂಡು,38ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.39ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.40ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.ಪೂರ್ವದಿಕ್ಕಿನ ಆಶ್ರಯ ಪಟ್ಟಣಗಳು
41ಆ ಕಾಲದಲ್ಲಿ ಮೋಶೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ಪಟ್ಟಣಗಳನ್ನು ಗೊತ್ತುಮಾಡಿದನು.42ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇಮಿಸಿದನು.43ಅವು ಯಾವುವೆಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್ ಮತ್ತು ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಪಟ್ಟಣಗಳು.ಮೋಶೆಯ ಎರಡನೆಯ ಉಪನ್ಯಾಸದ ಪೀಠಿಕೆ
44ಮೋಶೆ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವು ಇದೇ.45ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ.46ಅವರು ಯೊರ್ದನ್ ನದಿಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದರು. ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯೂ ಮತ್ತು ಇಸ್ರಾಯೇಲರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.47ಅವರು ಅವನ ರಾಜ್ಯವನ್ನೂ, ಬಾಷಾನ್ ದೇಶದ ಅರಸನಾದ ಓಗನ ರಾಜ್ಯವನ್ನೂ ಮತ್ತು ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನು ಗೆದ್ದುಕೊಂಡಿದ್ದರು.48ಅಂತು ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆರ್ಮೋನ್ ಎಂಬ ಸೀಯೋನ್ ಪರ್ವತದವರೆಗೂ ಮತ್ತು49ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬ್ ಸಮುದ್ರದ ವರೆಗೆ ಯೊರ್ದನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.
5ಮೋಶೆಯ ಎರಡನೆಯ ಉಪನ್ಯಾಸ - ಹತ್ತು ಆಜ್ಞೆಗಳು
1ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, <<ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.2ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.3ಆತನು ನಮ್ಮ ಪೂರ್ವಿಕರ ಸಂಗಡ ಈ ನಿಬಂಧನೆಯನ್ನು ಮಾಡದೆ, ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡಲೇ ಇದನ್ನು ಮಾಡಿದನು.4ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ಞಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತನಾಡಿದನು.5ನೀವು ಆ ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು, ಬೆಟ್ಟವನ್ನು ಹತ್ತದೆ ಇದ್ದುದರಿಂದ ನಾನು ಯೆಹೋವನಿಗೂ ಮತ್ತು ನಿಮಗೂ ನಡುವೆ ನಿಂತು ಆತನು ಹೇಳಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಆತನು ಹೇಳಿದ್ದೇನೆಂದರೆ,6<<ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.7ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.8<<ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.9ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.10ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋಸ್ಕರ ಸಾವಿರ ತಲೆಗಳವರೆಗೆ ದಯೆತೋರಿಸುವವನಾಗಿಯೂ ಇದ್ದೇನೆ.11<<ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.12<<ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಿಸಬೇಕು.13ಆರು ದಿನಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.14ಏಳನೆಯ ದಿನ ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ, ಪಶುಗಳು ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.15ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.16<<ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.17<<ನರಹತ್ಯ ಮಾಡಬಾರದು.18<<ವ್ಯಭಿಚಾರ ಮಾಡಬಾರದು.19<<ಕದಿಯಬಾರದು.20<<ಮತ್ತೊಬ್ಬನ ಮೇಲೆ ಸುಳ್ಳು ಸಾಕ್ಷಿ ಹೇಳಬಾರದು.21<<ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.>>22ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.ಜನರ ದಿಗ್ಭ್ರಮೆ - ಮೋಶೆಯ ಮಧ್ಯಸ್ತಿಕೆ
23ಆ ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಆ ಕತ್ತಲೊಳಗಿಂದ ದೇವರ ಸ್ವರವನ್ನು ಕೇಳಿ, ನೀವು ಅಂದರೆ ನಿಮ್ಮ ಕುಲಾಧಿಪತಿಗಳೂ ಮತ್ತು ಹಿರಿಯರೂ ನನ್ನ ಬಳಿಗೆ ಬಂದು,24<<ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು.25ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿ ಬಿಟ್ಟಿತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ಪುನಃ ಕೇಳಿದರೆ ಸತ್ತೇವು.26ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?27ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು>> ಎಂದು ಹೇಳಿದಿರಿ.28ನಿಮ್ಮ ಮಾತುಗಳನ್ನು ಯೆಹೋವನು ಕೇಳಿ ನನಗೆ, <<ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಆ ಮಾತುಗಳೆಲ್ಲಾ ಒಳ್ಳೆಯವೇ.29ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು>>30<< <ನಿಮ್ಮ ನಿಮ್ಮ ಡೇರೆಗಳಿಗೆ ಹಿಂತಿರುಗಿ ಹೋಗಿರಿ> ಎಂದು ಅವರಿಗೆ ಆಜ್ಞಾಪಿಸು.31ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು>> ಎಂದು ಹೇಳಿದನು.32ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.33ಆಗ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಸುಕ್ಷೇಮದಿಂದ ಬದುಕಿಕೊಳ್ಳುವಂತೆ, ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.
6ದೇವರನ್ನು ಪ್ರೀತಿಸಬೇಕೆಂಬ ಆಜ್ಞೆ
1ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.2ನೀವೂ, ನಿಮ್ಮ ಮಕ್ಕಳು, ಅವರ ಮಕ್ಕಳು ಮತ್ತು ಅವರ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ನಾನು ಈಗ ಬೋಧಿಸುವ ಆತನ ವಿಧಿನಿಯಮಗಳನ್ನೆಲ್ಲಾ ಅನುಸರಿಸಬೇಕೆಂದೂ ಮತ್ತು ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.3ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.4ಇಸ್ರಾಯೇಲರೇ, ಕೇಳಿರಿ, ನಮ್ಮ ದೇವರಾದ ಯೆಹೋವನು ಒಬ್ಬನೇ ದೇವರು;5ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.6ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು.7ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.8ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು.9ನಿಮ್ಮ ಮನೆಬಾಗಿಲಿನ ನಿಲುವು ಪಟ್ಟಿಗಳಲ್ಲಿಯೂ ಮತ್ತು ದ್ವಾರಗಳ ಮೇಲೆಯೂ ಇವುಗಳನ್ನು ಬರೆಯಬೇಕು.10ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ, ನೀವು ಕೂಡಿಸದ ಉತ್ತಮ ವಸ್ತುಗಳಿಂದ11ತುಂಬಿದ ಮನೆಗಳನ್ನೂ, ನೀವು ತೋಡದ ನೀರುಗುಂಡಿಗಳನ್ನೂ, ನೀವು ಬೆಳಸದ ದ್ರಾಕ್ಷಿತೋಟಗಳನ್ನೂ ಮತ್ತು ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ,12ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.13ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.14ಸುತ್ತಮುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು.15ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸುವುದಿಲ್ಲ, ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಾನು.16ನೀವು ಮಸ್ಸದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ.17ನಿಮ್ಮ ದೇವರಾದ ಯೆಹೋವನು ನಿಮಗೆ ನೇಮಿಸಿದ ಆಜ್ಞಾವಿಧಿನಿಯಮಗಳನ್ನು ಅನುಸರಿಸಲೇಬೇಕು.18ಯೆಹೋವನ ದೃಷ್ಟಿಗೆ ಯಾವುದು ನ್ಯಾಯವೂ ಮತ್ತು ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವುದು, ಮತ್ತು ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.19ಆತನು ತಾನೇ ನಿಮ್ಮ ಶತ್ರುಗಳನ್ನು ನಿಮ್ಮ ಎದುರಿನಿಂದ ಹೊರಡಿಸುವೆನೆಂದು ಮಾತುಕೊಟ್ಟನಲ್ಲವೇ.20ಇನ್ನು ಮುಂದೆ ನಿಮ್ಮ ಮಕ್ಕಳು, <<ಈ ಆಜ್ಞಾವಿಧಿನಿಯಮಗಳನ್ನು ನಮ್ಮ ದೇವರಾದ ಯೆಹೋವನು ಏಕೆ ನೇಮಿಸಿದನು?>> ಎಂದು ವಿಚಾರಿಸುವಾಗ21ನೀವು ಅವರಿಗೆ, <<ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆಮಾಡಿದನು.22ಆತನು ಐಗುಪ್ತ್ಯರನ್ನೂ, ಫರೋಹನನ್ನೂ ಮತ್ತು ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ, ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ,23ತಾನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಮ್ಮನ್ನು ಸೇರಿಸುವುದಕ್ಕಾಗಿ ಐಗುಪ್ತದೇಶದೊಳಗಿಂದ ಬರಮಾಡಿದನು.24ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ, ಆತನು ಈಗಲೂ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯುಳ್ಳವರಾಗಿರಬೇಕು.25ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿಸಲು ಯೋಗ್ಯರಾಗುವೆವು>> ಎಂಬುದಾಗಿ ನೀವು ಉತ್ತರಕೊಡಬೇಕು.
7ಕಾನಾನ್ಯರ ಜನರನ್ನು ಮತ್ತು ದೇವತಾಪ್ರತಿಮೆಗಳನ್ನೂ ನಿರ್ಮೂಲಮಾಡಲು ಆಜ್ಞೆ
1ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.2ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.3ಅವರೊಡನೆ ಬೀಗತನಮಾಡಬಾರದು; ಅವರ ಗಂಡು ಮಕ್ಕಳಿಗೆ ನಿಮ್ಮ ಹೆಣ್ಣುಮಕ್ಕಳನ್ನು ಕೊಡಲೂಬಾರದು ಮತ್ತು ಅವರ ಹೆಣ್ಣುಮಕ್ಕಳನ್ನು ನಿಮ್ಮ ಗಂಡುಮಕ್ಕಳಿಗೆ ತರಲೂಬಾರದು.4ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು.5ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.6ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.7ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು.8ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.9ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು10ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.11ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.ವಿಧೇಯತೆಯಲ್ಲಿ ಆಶೀರ್ವಾದ
12ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ಒಡಂಬಡಿಕೆಯನ್ನು ನಂಬಿಗಸ್ತಿಕೆಯಿಂದ ನೆರವೇರಿಸುವವನಾಗಿದ್ದಾನೆ.13ಆತನು ನಿಮ್ಮನ್ನು ಪ್ರೀತಿಸಿ, ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ, ವ್ಯವಸಾಯವನ್ನೂ, ನಿಮಗಿರುವ ದವಸ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ನಿಮ್ಮ ದನ ಮತ್ತು ಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.14ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ, ಹೆಣ್ಣುಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.15ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.16ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.17ಆ ಜನಗಳು ನಮಗಿಂತ ಹೆಚ್ಚಾಗಿದ್ದಾರೆ; ಅವರನ್ನು ಹೊರಡಿಸುವುದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ.18ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಮತ್ತು ಐಗುಪ್ತ್ಯರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.19ಆಗ ನೀವು ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು.20ಅದು ಮಾತ್ರವಲ್ಲದೆ ನಿಮ್ಮ ದೇವರಾದ ಯೆಹೋವನು ಕಣಜದ ಹುಳಗಳನ್ನು ಅವರ ನಡುವೆ ಕಳುಹಿಸುವನು. ಮರೆಯಾಗಿದ್ದು ಉಳಿದವರು ಆ ಹುಳಗಳ ದೆಸೆಯಿಂದ ನಾಶವಾಗಿ ನಿಮಗೆ ಕಾಣದೆ ಹೋಗುವರು.21ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ನಮ್ಮ ಭಕ್ತಿಗೆ ಪ್ರತಿಕಾರವಾಗಿ ವಿಸ್ಮಯ ಹುಟ್ಟಿಸುವ ದೇವರಾಗಿದ್ದಾನೆ.22ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ.23ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವನು.24ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ.25ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.26ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.
8ಸ್ಮರಿಸಿರಿ ಮತ್ತು ವಿಧೇಯರಾಗಿರಿ
1ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.2ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.3ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.4ಆ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹಳೇಯದಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ.5ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ.6ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.7ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ.8ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.9ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.10ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು.ದೇವರನ್ನು ಮರೆಯಬಾರದೆಂಬ ಎಚ್ಚರಿಕೆ
11ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ.12ನೀವು ಹೊಟ್ಟೆತುಂಬಾ ಊಟಮಾಡಿ, ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು,13ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ ನಿಮ್ಮ ದನಗಳೂ, ಆಡು ಕುರಿಗಳೂ, ನಿಮ್ಮ ಬೆಳ್ಳಿ ಮತ್ತು ಬಂಗಾರವೂ,14ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.15ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.16ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು17ನಿಮ್ಮ ಮನಸ್ಸಿನೊಳಗೆ, <<ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು>> ಎಂದು ಅಂದುಕೊಂಡೀರಿ.18ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.19ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.20ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ.
9ದೇವರ ಕೃಪೆಯಿಂದಲೇ ವಿಜಯ
1ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.2ಆ ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, <<ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?>> ಎಂಬ ಮಾತನ್ನು ಕೇಳಿದ್ದೀರಿ.3ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ.4ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, <<ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ>> ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.5ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.6ನಿಮ್ಮ ದೇವರಾದ ಯೆಹೋವನು ಆ ಉತ್ತಮ ದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಸದಾಚಾರದ ಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಯನ್ನು ಪಾಲಿಸದ ಮೊಂಡ ಜನರೇ ಆಗಿದ್ದೀರಿ.ಬಂಗಾರದ ಬಸವನ ಮೂರ್ತಿ
7ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.8ಉದಾಹರಣೆಗೆ, ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸ ಮಾಡಬೇಕೆಂದಿದ್ದನು.9ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.10ಆಗ ಯೆಹೋವನು ತನ್ನ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆ ಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು.11ಆ ನಲ್ವತ್ತು ದಿನಗಳು ಕಳೆದ ಮೇಲೆ ಯೆಹೋವನು ತನ್ನ ಆಜ್ಞೆಗಳಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು, <<ನೀನು ಬೇಗ ಇಲ್ಲಿಂದ ಹೋಗು;12ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ>> ಎಂದು ಹೇಳಿದನು.13ಅದಲ್ಲದೆ ಆತನು ನನಗೆ, <<ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು.14ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು>> ಎಂದು ಹೇಳಿದನು.15ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುವ ಆ ಬೆಟ್ಟದಿಂದ ಇಳಿದು ಬಂದು ನೋಡಲಾಗಿ16ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು, ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟು ಹೋದದ್ದು ನನಗೆ ಕಂಡುಬಂತು.17ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮಗೆದುರಾಗಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆನು.18ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.19ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.20ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದರಿಂದ ನಾನು ಅವನಿಗೋಸ್ಕರವಾಗಿಯೂ ಆ ಸಮಯದದಲ್ಲಿ ಪ್ರಾರ್ಥಿಸಿದೆನು.21ಮತ್ತು ನೀವು ಯಾವುದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು, ಒಡೆದು, ಅರೆದು ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆ.22ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದ್ದಿರಿ.23ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, <<ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ>> ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ.24 ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನಿಗೆ ದ್ರೋಹಿಗಳಾಗಿ ನಡೆದುಕೊಂಡಿದ್ದೀರಿ.25ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.26ನಾನು ಆತನನ್ನು ಬೇಡಿಕೊಳ್ಳುತ್ತಾ, <<ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.27ಇವರ ಮೊಂಡುತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರನ್ನು ನೆನಪಿಗೆ ತಂದುಕೋ.28ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು, <ಯೆಹೋವನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದನು> ಎಂದು ಹೇಳುವುದಕ್ಕೆ ಆಸ್ಪದವಾದೀತು.29ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ>> ಎಂದು ಬಿನ್ನೈಸಿದೆನು.
10ಮೋಶೆಯು ದಶಾಜ್ಞೆಗಳನ್ನು ಪುನಃ ಪಡೆದದ್ದು
1ಆ ಕಾಲದಲ್ಲಿ ಯೆಹೋವನು ನನಗೆ, <<ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು, ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.2ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿ ಇಡಬೇಕು>> ಎಂದು ಆಜ್ಞಾಪಿಸಿದನು.3ಆದಕಾರಣ ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿ, ಆ ಎರಡು ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನು ಹತ್ತಿದೆನು.4ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.5ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.ಆರೋನನ ಮರಣ ಮತ್ತು ಲೇವಿ ಕುಲದವರ ಜವಾಬ್ದಾರಿಕೆಗಳು
6(ಇಸ್ರಾಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಅಲ್ಲಿಯೇ ಸಮಾಧಿ ಮಾಡಿದರು. ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.7ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.)8ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.9ಆದುದರಿಂದ ಉಳಿದ ಇಸ್ರಾಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವತ್ತು.10ನಾನು ಮೊದಲಿನಂತೆ ಹಗಲಿರುಳು ನಲ್ವತ್ತು ದಿನವೂ ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.11ತರುವಾಯ ಯೆಹೋವನು ನನಗೆ, <<ನೀನು ಈ ಜನರ ಮುಂದೆ ಹೋಗು; ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ>> ಎಂದು ಆಜ್ಞಾಪಿಸಿದನು.ಯೆಹೋವನ ಭಯಭಕ್ತಿ
12ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,13ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು14ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.15ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.16ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.17ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.18ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.19ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ.20ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.21ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.22ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.
11ಇಸ್ರಾಯೇಲರ ಹಿಂದಿನ ಅನುಭವಗಳು
1ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು.2ನೀವು ನಿಮ್ಮ ದೇವರಾದ ಯೆಹೋವನ ಶಿಕ್ಷಣ ಕ್ರಮವನ್ನೂ, ಮಹಿಮೆಯನ್ನೂ, ಭುಜಬಲವನ್ನೂ ಮತ್ತು ಶಿಕ್ಷಾಹಸ್ತವನ್ನೂ ಅಂದರೆ,3ಆತನು ಐಗುಪ್ತದೇಶದಲ್ಲಿ ಫರೋಹನನ್ನೂ ಹಾಗೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡಿಸಿದ ಸೂಚಕಕಾರ್ಯಗಳನ್ನೂ ಮತ್ತು ಮಹತ್ಕಾರ್ಯಗಳನ್ನೂ,4ಐಗುಪ್ತ್ಯರ ಸೈನ್ಯ ಅಂದರೆ, ಅವರ ರಥಾಶ್ವಬಲಗಳು ನಿಮ್ಮನ್ನು ಹಿಂದಟ್ಟಿ ಬಂದಾಗ ಆತನು ಕೆಂಪು ಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ,5ನೀವು ಈ ಸ್ಥಳಕ್ಕೆ ಸೇರುವ ತನಕ ಆತನು ನಿಮಗೋಸ್ಕರ ಅರಣ್ಯದಲ್ಲಿ ಉಪಕಾರಮಾಡಿದ್ದನ್ನೂ,6ರೂಬೇನನ ಮೊಮ್ಮಕ್ಕಳೂ, ಎಲೀಯಾಬನ ಮಕ್ಕಳೂ ಆದ ದಾತಾನ್ ಮತ್ತು ಅಬೀರಾಮರು ತಿರುಗಿ ಬಿದ್ದಾಗ ಭೂಮಿಯು ಬಾಯ್ದೆರೆದು ಅವರನ್ನೂ, ಅವರ ಮನೆಯವರನ್ನೂ, ಅವರ ಡೇರೆಗಳನ್ನೂ ಮತ್ತು ಅವರಿಗೆ ಸೇರಿದ ಎಲ್ಲಾ ಪ್ರಾಣಿಗಳನ್ನೂ ಇಸ್ರಾಯೇಲರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ.7ಯೆಹೋವನು ನಡಿಸಿದ ಆ ವಿಶೇಷ ಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಿದ್ದೇನೆ.ವಾಗ್ದತ್ತ ದೇಶದ ಸೌಭಾಗ್ಯ
8ಆದುದರಿಂದಲೇ ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿಯನ್ನು ದಾಟಿ ಆಚೆಯಿರುವ9ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು ನಿಮ್ಮ ಪೂರ್ವಿಕರಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಹಾಲೂ ಮತ್ತು ಜೇನೂ ಹರಿಯುವ ದೇಶ.10ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ವ್ಯವಸಾಯ ಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರು ಕಟ್ಟುತ್ತಿದ್ದಿರಿ.11ಆದರೆ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶವೋ ಹಳ್ಳದಿಣ್ಣೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವುದು.12ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ವರ್ಷದ ಪ್ರಾರಂಭ ಮೊದಲುಗೊಂಡು ಕೊನೆಯ ವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.13ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ,14ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.15ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ.16ಆದರೆ ನೀವು ಎಚ್ಚರದಿಂದಿರಬೇಕು; ನಿಮ್ಮ ಹೃದಯವು ಮರುಳುಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ,17ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.18ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.19ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.20ನಿಮ್ಮ ಮನೆ ಬಾಗಿಲಿನ ನಿಲುವುಪಟ್ಟಿಗಳಲ್ಲಿಯೂ ಮತ್ತು ಹೆಬ್ಬಾಗಿಲುಗಳ ಮೇಲೆಯೂ ಇವುಗಳನ್ನು ಬರೆಯಬೇಕು.21ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶವು ಎಷ್ಟು ಕಾಲ ಇರುವುದೋ, ಅಷ್ಟು ಕಾಲದ ವರೆಗೆ ನೀವೂ ಮತ್ತು ನಿಮ್ಮ ಸಂತತಿಯವರೂ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ದೇಶದಲ್ಲಿ ಬಾಳುವಿರಿ.22ನಾನು ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು, ಆತನನ್ನೇ ಹೊಂದಿಕೊಂಡಿರಬೇಕು.23ಆಗ ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು. ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವಿರಿ.24ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳು ನಿಮ್ಮದಾಗುವವು. ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದ ವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವುದು.25ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.26ಇಗೋ ನೋಡಿರಿ, ಈ ಹೊತ್ತು ನಾನು ಆಶೀರ್ವಾದವನ್ನೂ ಮತ್ತು ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ.27ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಆಶೀರ್ವಾದವೂ,28ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.29ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಮತ್ತು ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.30ಆ ಬೆಟ್ಟಗಳು ಯೊರ್ದನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ.31ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಬೇಕು. ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಾಗ32ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುರಿಸಿ ನಡೆಯಲೇಬೇಕು.
12ಯೆಹೋವನ ಆರಾಧನೆಗೋಸ್ಕರ ಒಂದೇ ಸ್ಥಳದಲ್ಲಿ ಸೇರಬೇಕೆಂಬ ಆಜ್ಞೆ
1ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ವಾಸಿಸುವ ಎಲ್ಲಾ ದಿನಗಳಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ:2ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು.3ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು.4ಅವರು ಮಾಡಿದ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವನನ್ನು ಪೂಜಿಸಬಾರದು.5ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.6ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.7ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.8ಈಗ ಈ ಸ್ಥಳದಲ್ಲಿ ನಾವು ನಡೆಕೊಳ್ಳುವಂತೆ ಎಲ್ಲರೂ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ನಡೆಯಬಾರದು.9ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಸ್ವತ್ತಿಗೆ ಸೇರಿ ನೀವು ಇನ್ನೂ ವಿಶ್ರಾಂತಿ ಹೊಂದಲಿಲ್ಲವಲ್ಲಾ.10ಆದರೆ ನೀವು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ, ನಿಮ್ಮ ಸುತ್ತಲೂ ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ,11ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.12ಅಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.13ನೀವು ಕಂಡ ಕಂಡ ಸ್ಥಳಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸಬಾರದು, ನೋಡಿಕೊಳ್ಳಿರಿ.14ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು.15ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.16ರಕ್ತವನ್ನು ಮಾತ್ರ ತಿನ್ನಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.17ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.18ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.19ನೀವು ನಿಮ್ಮ ದೇಶದಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು, ಜ್ಞಾಪಕವಿರಲಿ.20ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು, <<ನಾವು ಮಾಂಸಾಹಾರವನ್ನು ಊಟಮಾಡಬೇಕು>> ಎಂದು ನೀವು ಇಷ್ಟಪಟ್ಟರೆ ಮಾಂಸಾಹಾರವನ್ನು ಮಾಡಬಹುದು.21ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕಾಗಿ ಆರಿಸಿಕೊಂಡ ಸ್ಥಳವು ನಿಮಗೆ ದೂರವಾದರೆ, ಆತನು ನಿಮಗೆ ಅನುಗ್ರಹಿಸಿದ ದನ ಮತ್ತು ಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯಿದು ನಿಮ್ಮ ಊರಲ್ಲೇ ಊಟಮಾಡಬಹುದು.22ಜಿಂಕೆದುಪ್ಪಿಗಳನ್ನು ಶುದ್ಧರೂ ಮತ್ತು ಅಶುದ್ಧರೂ ತಿನ್ನುವ ಪ್ರಕಾರ ದನ ಮತ್ತು ಕುರಿಗಳನ್ನೂ ತಿನ್ನಬಹುದು.23ಆದರೆ ರಕ್ತವು ಜೀವಾಧಾರವಾದ್ದರಿಂದ ಮಾಂಸದೊಡನೆ ರಕ್ತವನ್ನು ತಿನ್ನಲೇ ಕೂಡದೆಂಬುದನ್ನು ಜ್ಞಾಪಕದಲ್ಲಿಡಿರಿ. ಪಶುಮಾಂಸದೊಡನೆ ಅದರ ಜೀವಾಧಾರವಾದದ್ದನ್ನೂ ತಿನ್ನಬಾರದಷ್ಟೆ.24ಅದನ್ನು ತಿನ್ನದೆ, ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.25ನೀವು ಅದನ್ನು ತಿನ್ನದೆ ಯೆಹೋವನಿಗೆ ಮೆಚ್ಚಿಗೆಯಾಗಿರುವುದನ್ನು ನಡಿಸಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು.26ಆದರೆ ನಿಮ್ಮ ಬಳಿಯಲ್ಲಿರುವ ದೇವರ ವಸ್ತುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವನು ಆರಿಸಿಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.27ಸರ್ವಾಂಗ ಹೋಮಗಳನ್ನು ಸಮರ್ಪಿಸುವಾಗ, ರಕ್ತ ಮಾಂಸಗಳೆರಡನ್ನೂ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯಲ್ಲಿ ದಹಿಸಿಬಿಡಬೇಕು. ಸಮಾಧಾನ ಯಜ್ಞಗಳನ್ನು ಮಾಡುವಾಗ ರಕ್ತವನ್ನು ಆತನ ಯಜ್ಞವೇದಿಯ ಮೇಲೆ ಸುರಿದುಬಿಟ್ಟು ಮಾಂಸವನ್ನು ಊಟಮಾಡಬೇಕು.28ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿ, ನಿಮ್ಮ ದೇವರಾದ ಯೆಹೋವನಿಗೆ ಒಳ್ಳೆಯದೂ ಹಾಗು ಯುಕ್ತವೂ ಆಗಿರುವುದನ್ನು ಮಾಡಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು.ಇತರ ದೇವರುಗಳನ್ನು ಎಷ್ಟು ಮಾತ್ರಕ್ಕೂ ಆರಾಧಿಸಬಾರದೆಂಬ ವಿಧಿ
29ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ಮೇಲೆ ನೀವು ಅವರ ದೇಶವನ್ನು ವಶಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ30ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಟಪದ್ಧತಿಗಳನ್ನು ಅನುಸರಿಸಬಾರದು. ನೀವು, <<ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರೋ ಹಾಗೆಯೇ ನಾವೂ ಸೇವಿಸುವೆವು>> ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು.31ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.32ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.
131ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ,2<<ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ>> ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು.3ಏಕೆಂದರೆ ನಿಮ್ಮ ದೇವರಾದ ಯೆಹೋವನು, <<ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ>> ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.4ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.5ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.6ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, <<ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ>> ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,7ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ, ದೂರವಾದವರ ದೇವರುಗಳಾದರೂ, ಭೂಲೋಕದ ಯಾವ ಭಾಗದವರ ದೇವರುಗಳಾದರೂ8ನೀವು ಸಮ್ಮತಿಸಲೂ ಬಾರದು ಮತ್ತು ಕಿವಿಗೊಡಲೂಬಾರದು. ಅವನನ್ನು ಕನಿಕರಿಸಲೂಬಾರದು, ತಪ್ಪಿಸಲೂಬಾರದು, ಬಚ್ಚಿಡಲೂಬಾರದು ಅವನನ್ನು ಕೊಲ್ಲಿಸಲೇಬೇಕು.9ಆ ಶಿಕ್ಷೆಯನ್ನು ನಡಿಸುವಾಗ ತಪ್ಪು ಕಂಡವನೇ ಮೊದಲು ಕೈಹಾಕಬೇಕು.10ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.11ಇದನ್ನು ಇಸ್ರಾಯೇಲರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಇನ್ನು ಮುಂದೆ ಮಾಡದೆ ಇರುವರು.12ನಿಮ್ಮ ದೇವರಾದ ಯೆಹೋವನು ನಿಮ್ಮ ನಿವಾಸಕ್ಕಾಗಿ ಕೊಡುವ ಯಾವುದಾದರೂ ಒಂದು ಊರಿನ ವಿಷಯದಲ್ಲಿ,13ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, <<ಆ ದೇವರುಗಳನ್ನು ಸೇವಿಸೋಣ ಬನ್ನಿರಿ>> ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ,14ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂತಹ ಅಸಹ್ಯಕಾರ್ಯವು ಇಸ್ರಾಯೇಲರಲ್ಲಿ ನಡೆದದ್ದು15ನಿಜವೆಂದು ತಿಳಿದುಬಂದರೆ ಆ ಊರನ್ನು ಸಂಪೂರ್ಣವಾಗಿ ಹಾಳು ಮಾಡಿ, ಅದರಲ್ಲಿರುವ ಎಲ್ಲಾ ಜನರನ್ನೂ, ದನಗಳನ್ನೂ ಕತ್ತಿಯಿಂದ ಸಂಹರಿಸಿಡಬೇಕು.16ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.17<<ಕೇವಲ ಯೆಹೋವನಿಗೇ ಆಗಲಿ>> ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.18ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟರೆ, ಆಗ ಆತನು ತನ್ನ ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸಿ, ತಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.
14ಶುದ್ಧ ಮತ್ತು ಅಶುದ್ಧ ಆಹಾರ
1ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.2ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.3ನಿಷಿದ್ಧವಾಗಿರುವ ಯಾವುದನ್ನೂ ನೀವು ತಿನ್ನಬಾರದು.4ನೀವು ತಿನ್ನಬಹುದಾದ ಪಶುಜಾತಿಗಳು ಯಾವುವೆಂದರೆ ದನ, ಕುರಿ, ಆಡು,5ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ (ಕಾಡುಟಗರು) ಎಂಬಿವುಗಳೇ.6ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.7ಆದರೆ ಯಾವ ಪ್ರಾಣಿಯು ಮೆಲಕುಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲಕು ಹಾಕುವುದಿಲ್ಲವೋ, ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆ: ಒಂಟೆ, ಮೊಲ, ಬೆಟ್ಟದಮೊಲ ಇವುಗಳು ಮೆಲಕುಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ.8ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು.9ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ: ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆ ಇದ್ದು ದೇಹವೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.10ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ದೇಹವು ಇರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅದು ನಿಮಗೆ ಅಶುದ್ಧ.11ಎಲ್ಲಾ ಶುದ್ಧ ಪಕ್ಷಿಗಳ ಮಾಂಸವನ್ನು ನೀವು ತಿನ್ನಬಹುದು.12ನೀವು ತಿನ್ನಬಾರದವುಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು, ಕ್ರೌಂಚ,13ಗಿಡಗ, ಹಕ್ಕಿಸಾಲೆ, ಸಕಲವಿಧವಾದ ಹದ್ದು,14ಸಕಲವಿಧವಾದ ಕಾಗೆ,15ಉಷ್ಟ್ರಪಕ್ಷಿ, ಉಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ,16ಗೂಬೆ, ಹೆಗ್ಗೂಬೆ, ಕರೇಟು,17ಚೀಲಮೂಗಿ, ರಣಹದ್ದು, ನೀರುಕಾಗೆ,18ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಕಣ್ಣಕಪಡಿ.19ರೆಕ್ಕೆಯುಳ್ಳ ಕ್ರಿಮಿಕೀಟಗಳೆಲ್ಲವೂ ನಿಮಗೆ ಅಶುದ್ಧ. ಅವುಗಳನ್ನು ನೀವು ತಿನ್ನಬಾರದು.20ರೆಕ್ಕೆಯುಳ್ಳವುಗಳಲ್ಲಿ ಶುದ್ಧ ಜಾತಿಯವುಗಳನ್ನು ಮಾತ್ರ ನೀವು ತಿನ್ನಬಹುದು.21ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.ದಶಮಾಂಶವನ್ನು ಕೊಡಬೇಕೆಂಬ ನಿಯಮ
22ಪ್ರತಿವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮ ಭಾಗವನ್ನು ಪ್ರತ್ಯೇಕಿಸಬೇಕು.23ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು.24ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳವು ನಿಮಗೆ ದೂರವಾಗಿದ್ದು, ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಅಭಿವೃದ್ಧಿಯನ್ನು ಉಂಟುಮಾಡಿದ ಕಾಲದಲ್ಲಿ,25ಅವುಗಳನ್ನು ಮಾರಿಬಿಟ್ಟು, ಆ ಹಣದ ಗಂಟನ್ನು ಆತನು ಆರಿಸಿಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಿರಿ.26ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಆ ಹಣದಿಂದ ಕೊಂಡುಕೊಂಡು, ನೀವೂ ಮತ್ತು ನಿಮ್ಮ ಮನೆಯವರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.27ಲೇವಿಯರಿಗೆ ನಿಮ್ಮೊಡನೆ ಯಾವ ಸ್ವಾಸ್ತ್ಯವೂ ಇಲ್ಲವಾದ್ದರಿಂದ ನೀವು ಅವರನ್ನು ಕೈಬಿಡಬಾರದು.28ಪ್ರತಿ ಮೂರನೆಯ ವರ್ಷದ ಬೆಳೆಯ ದಶಮಭಾಗವನ್ನು ತಂದು ನೀವು ಇರುವ ಊರಿನಲ್ಲಿಯೇ ಕೂಡಿಸಬೇಕು.29ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.
15ಏಳನೆಯ ವರ್ಷದಲ್ಲಿ ಸಾಲಗಳ ಮನ್ನಾ
1ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಸಾಲವನ್ನು ಬಿಟ್ಟುಬಿಡಬೇಕು.2ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.3ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟಿರುವುನ್ನು ಕೇಳಬಾರದು.4ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ,5ಯೆಹೋವನು ತಾನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ನೀವು ಅಭಿವೃದ್ಧಿ ಹೊಂದುವುದರಿಂದ ನಿಮ್ಮಲ್ಲಿ ಬಡವರೇ ಇರುವುದಿಲ್ಲ.6ನಿಮ್ಮ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ. ನೀವು ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ.7ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.8ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು.9ನೀವು <<ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು>> ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.10ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.11ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, <<ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು>> ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.ದಾಸರಿಗೆ ಬಿಡುಗಡೆ
12ಸ್ವದೇಶದವರೊಳಗೆ ಯಾವ ಇಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ದಾಸರಾಗಿರುವುದಕ್ಕಾಗಿ ಮಾರಲ್ಪಡುವ ಪಕ್ಷಕ್ಕೆ, ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ; ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಡುಗಡೆ ಮಾಡಬೇಕು.13ಬಿಡುಗಡೆ ಮಾಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.14ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಹಿಂಡು, ದವಸ, ದ್ರಾಕ್ಷಿ ಆಲೆ ಮತ್ತು ಕಣ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.15ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.ಶಾಶ್ವತ ದಾಸರಾಗಲು ಕ್ರಮ
16ಒಂದು ವೇಳೆ ಆ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು, ನಿಮ್ಮನ್ನೂ ಮತ್ತು ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆಯಾಗಿ ಹೋಗುವುದಿಲ್ಲ ಎಂದು ಹೇಳುವ ಪಕ್ಷಕ್ಕೆ,17ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ, ಕದಕ್ಕೆ ಸಿಕ್ಕಿಸಬೇಕು. ಆ ದಿನದಿಂದ ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಾಗಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.18ದಾಸನನ್ನು ಬಿಡುಗಡೆಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.ದನಕುರಿಗಳಲ್ಲಿ ಚೊಚ್ಚಲಾದ ಗಂಡು ಯೆಹೋವನಿಗೆ ಸಮರ್ಪಿವಾದುದು
19ದನಗಳಲ್ಲಿಯೂ ಮತ್ತು ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.20ಪ್ರತಿ ವರ್ಷದಲ್ಲಿ ನೀವೂ ಮತ್ತು ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ಆತನ ಸನ್ನಿಧಿಯಲ್ಲೇ ಕೊಯಿದು ತಿನ್ನಬೇಕು.21ಅದು ಕುಂಟಾಗಿ, ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು.22ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆ ದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.23ನೀವು ರಕ್ತವನ್ನು ಮಾತ್ರ ಊಟಮಾಡಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.
16ಪಸ್ಕಹಬ್ಬ
1ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.2ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.3ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.4ಆ ಏಳು ದಿನಗಳು ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನೂ ಮರುದಿನದ ವರೆಗೆ ಉಳಿಸಬಾರದು.5ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸ್ಕದ ಪಶುವನ್ನು ವಧಿಸದೆ,6ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು.7ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿನ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟು ಹೋಗಬಹುದು.8ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು.ಸುಗ್ಗಿ ಹಬ್ಬ
9ಬೆಳೆ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ,10ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.11ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.12ಐಗುಪ್ತದೇಶದಲ್ಲಿ ದಾಸರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.ಪರ್ಣಶಾಲೆಗಳ ಹಬ್ಬ
13ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.14ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.15ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.16ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.17ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯಾನುಸಾರ ಕೊಡಬೇಕು.ನ್ಯಾಯಾಧಿಪತಿಗಳ ನೇಮಕ
18ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.19ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.20ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.ವಿಗ್ರಹಾರಾಧನೆಯನ್ನು ಮಾಡಬಾರದು
21ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.22ಪವಿತ್ರ ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದದ್ದು.
171ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ.2ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ,3ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,4ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದು ಬಂದರೆ,5ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.6ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು.7ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.ನ್ಯಾಯವಿಚಾರಣೆಯ ಕ್ರಮ
8ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.9ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.10ಯೆಹೋವನು ಆರಿಸಿಕೊಂಡ ಆ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು.11ಅವರು ಕಲಿಸಿಕೊಡುವ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತಿರುಗಬಾರದು.12ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.13ಆಗ ಜನರೆಲ್ಲರೂ ಕೇಳಿ ಭಯಪಟ್ಟು ಇನ್ನು ಅಹಂಕಾರದಿಂದ ನಡೆಯದೆ ಇರುವರು.ಅರಸನನ್ನು ನೇಮಿಸುವ ವಿಷಯ
14ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, <<ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ>> ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ,15ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡ ವ್ಯಕ್ತಿಯನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇಮಿಸಬಾರದು.16ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.17ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.18ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.19ಅವನು ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ಮತ್ತು ವಿಧಿಗಳನ್ನೂ ಅನುಸರಿಸುವುದಕ್ಕೆ ಅಭ್ಯಾಸಮಾಡಿಕೊಳ್ಳುವಂತೆ ಆ ಗ್ರಂಥವು ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದನ್ನು ಓದಿಕೊಳ್ಳುತ್ತಾ ಇರಬೇಕು.20ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು.
18ಯಾಜಕರಿಗೆ ಸಲ್ಲಬೇಕಾದ ಕಾಣಿಕೆಗಳ ವಿಷಯ
1ಯಾಜಕಸೇವೆ ಮಾಡುವ ಲೇವಿಯರಿಗಾಗಲಿ ಅಥವಾ ಲೇವಿಯ ಕುಲದವರಲ್ಲಿ ಯಾರಿಗೇ ಆಗಲಿ ಇತರ ಇಸ್ರಾಯೇಲರೊಡನೆ ಸ್ವಂತಕ್ಕಾಗಿ ಪಾಲಾಗಲಿ ಅಥವಾ ಸ್ವಾಸ್ತ್ಯವಾಗಲಿ ದೊರೆಯುವುದಿಲ್ಲ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.2ಸ್ವದೇಶಸ್ಥರೊಂದಿಗೂ ಅವರಿಗೆ ಸ್ವತ್ತು ದೊರೆಯುವುದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವತ್ತಾಗಿರುವನು.3ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.4ಧಾನ್ಯ, ದ್ರಾಕ್ಷಾರಸ ಮತ್ತು ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು.5ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಮತ್ತು ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆ ಮಾಡುವುದಕ್ಕೆ ತಾನೇ ನೇಮಿಸಿಕೊಂಡನಲ್ಲಾ.6ಇಸ್ರಾಯೇಲರ ಯಾವುದಾದರೂ ಒಂದು ಊರಲ್ಲಿ ಇಳಿದುಕೊಂಡಿರುವ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು, ಯೆಹೋವನು ಆರಿಸಿಕೊಂಡ ಪವಿತ್ರ ಸ್ಥಳಕ್ಕೆ ಬಂದು,7ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ತಾನೂ ಸೇವೆ ನಡಿಸಿದರೆ,8ಅವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ, ಇತರ ಲೇವಿಯರೊಂದಿಗೆ ಸಮವಾಗಿ ಭೋಗಿಸುವುದಕ್ಕೆ ಬಾಧ್ಯನಾಗಿರುವನು.ಅಸಹ್ಯವಾದ ಆಚಾರವಿಚಾರಗಳು
9ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು.10ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,11ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು.12ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.13ನೀವು ನಿಮ್ಮ ದೇವರಾದ ಯೆಹೋವನ ಮುಂದೆ ನಿರ್ದೊಷಿಗಳಾಗಿರಬೇಕು.14ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ಶಕುನಗಳನ್ನು ನೋಡುತ್ತಾರೆ ಮತ್ತು ಯಂತ್ರ ಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆಹೊಂದಲಿಲ್ಲ.ಪ್ರವಾದಿಯನ್ನು ಕಳುಹಿಸುವ ವಾಗ್ದಾನ
15ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.16ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, <<ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು>> ಎಂದು ನೀವು ಹೇಳಿದಿರಷ್ಟೆ.17ಆಗ ಯೆಹೋವನು ನನಗೆ, <<ಇವರು ಹೇಳಿದ ಮಾತು ಒಳ್ಳೆಯದೇ;18ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.19ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಗೊಡುವದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು.20ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.21<ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ> ಅಂದುಕೊಳ್ಳುತ್ತೀರೋ?22ಪ್ರವಾದಿಯು <ಇದು ಯೆಹೋವನ ನುಡಿ> ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು>> ಎಂದು ಹೇಳಿದನು.
19ಆಶ್ರಯ ನಗರಗಳು
1ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಜನಾಂಗಗಳನ್ನು ಆತನು ನಾಶಮಾಡಿ ಬಿಟ್ಟ ತರುವಾಯ, ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರ ಗ್ರಾಮಗಳಲ್ಲಿಯೂ,2ಮನೆಗಳಲ್ಲಿಯೂ ವಾಸವಾಗಿರುವಾಗ, ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.3ನರಹತ್ಯಮಾಡಿದವರು ಆ ನಗರಗಳಿಗೆ ಓಡಿಹೊಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಗಳನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ದೇಶವನ್ನು ಮೂರು ಭಾಗ ಮಾಡಬೇಕು.4ಆ ನಗರಗಳ ವಿವರ ಹೀಗಿದೆ, ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.5ಉದಾಹರಣೆ, ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ, ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ, ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.6ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು.7ಈ ಕಾರಣದಿಂದ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕೆಂದು ಆಜ್ಞಾಪಿಸಿದ್ದೇನೆ.8ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ತಾನು ನಿಮ್ಮ ಪೂರ್ವಿಕರಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವಾಗ, ಇನ್ನೂ ಮೂರು ನಗರಗಳನ್ನು ನಿಮಗಾಗಿ ಗೊತ್ತುಮಾಡಬೇಕು. ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ,9ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳುವ ಮಾರ್ಗದಲ್ಲೇ ಯಾವಾಗಲೂ ನಡೆಯುವುದಾದರೆ, ಆಗ ಯೆಹೋವನು ಈ ಮೂರು ನಗರಗಳನ್ನು ನಿಮಗೆ ಕೊಡುವನು.10ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು.11ಆದರೆ ಯಾವನಾದರೂ ಒಬ್ಬನಲ್ಲಿ ದ್ವೇಷವನ್ನೇ ಇಟ್ಟು ಸಮಯನೋಡಿಕೊಂಡು, ಅವನ ಮೇಲೆ ಬಿದ್ದು ಅವನನ್ನು ಹೊಡೆದು ಕೊಂದ ತರುವಾಯ ಈ ಪಟ್ಟಣಗಳಲ್ಲಿ12ಒಂದಕ್ಕೆ ಓಡಿಹೋದರೆ, ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಒಪ್ಪಿಸಬೇಕು.13ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನನ್ನು ಇಸ್ರಾಯೇಲರಲ್ಲಿ ಉಳಿಯದಂತೆ ಮಾಡಬೇಕು.ಮೇರೆಯನ್ನು ಸರಿಸಕೂಡದೆಂಬ ಕ್ರಮ
14ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವತ್ತಿನಲ್ಲಿ ನೆರೆಯವನ ಭೂಮಿಯ ಹಿಂದಿನ ಕಾಲದ ಗಡಿಯನ್ನು ಒತ್ತಬಾರದು.ಒಂದೇ ಸಾಕ್ಷಿ ಸಾಲದು ಎಂಬ ನಿಯಮ
15ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ರುಜುವಾತಾಗುವುದಕ್ಕೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳು ಬೇಕು.ಸುಳ್ಳು ಸಾಕ್ಷಿಯನ್ನು ಹೇಳಿದವನಿಗೆ ಶಿಕ್ಷೆ
16ಯಾವನಾದರೂ ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿಹೇಳಿದರೆ,17ವ್ಯಾಜ್ಯವಾಡುವ ಆ ಇಬ್ಬರೂ ಯೆಹೋವನ ಸನ್ನಿಧಿಯಲ್ಲಿ ಯಾಜಕರ ಮುಂದೆಯೂ, ಆಗ ಇರುವ ನ್ಯಾಯಾಧಿಪತಿಗಳ ಮುಂದೆಯೂ ನಿಲ್ಲಬೇಕು.18ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆ ಮಾಡಿದ ಮೇಲೆ ಆ ಮನುಷ್ಯನ ಸಾಕ್ಷಿ ಸುಳ್ಳೆಂದು ತೋರಿಬಂದರೆ,19ಅವನು ಆ ಮತ್ತೊಬ್ಬನಿಗೆ ಕೊಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.20ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಅಂಥ ದುಷ್ಟತ್ವವನ್ನು ನಡೆಸುವುದಿಲ್ಲ.21ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನೂ, ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ, ಕೈಗೆ ಪ್ರತಿಯಾಗಿ ಕೈಯನ್ನೂ ಮತ್ತು ಕಾಲಿಗೆ ಪ್ರತಿಯಾಗಿ ಕಾಲನ್ನೂ ತೆಗೆದುಬಿಡಬೇಕು.
20ಯುದ್ಧಕ್ರಮ
1ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.2ನಿಮಗೆ ಯುದ್ಧ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಭಟರ ಸಂಗಡ ಮಾತನಾಡಿ ಅವರಿಗೆ,3<<ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.4ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು>> ಎಂದು ಹೇಳಬೇಕು.5ಮತ್ತು ಸೈನ್ಯಾಧಿಪತಿಗಳು ಅವರಿಗೆ, <<ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು.6ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಬಹುದು.7ಯಾವನಾದರೂ ತಾನು ಮದುವೆಗೆ ನಿಶ್ಚಯ ಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಯುದ್ಧದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳಬಹುದು>> ಎಂದು ಹೇಳಬೇಕು.8ಇದಲ್ಲದೆ, <<ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು>> ಎಂದು ಹೇಳಬೇಕು.9ಸೈನ್ಯಾಧಿಪತಿಗಳು ಭಟರಿಗೆ ಈ ರೀತಿಯಾಗಿ ಹೇಳಿದ ನಂತರ ದಂಡಿನವರ ಮೇಲೆ ನಾಯಕರನ್ನು ನೇಮಿಸಬೇಕು.10ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.11ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.12ಅವರು ನಿಮ್ಮ ಮಾತಿಗೆ ಸಮ್ಮತಿಸದೆ ಎದುರಿಸಿದರೆ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.13ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ನಿಮಗೆ ವಶವಾಗುವಂತೆ ಮಾಡಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರಮಾಡಬೇಕು.14ಹೆಂಗಸರನ್ನೂ, ಮಕ್ಕಳನ್ನೂ, ದನಗಳನ್ನೂ ಮತ್ತು ಊರಿನಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.15ಈ ದೇಶದ ಜನಾಂಗಗಳಿಗೆ ಸೇರದೆ ದೂರವಾಗಿರುವ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೇ ನಡೆದುಕೊಳ್ಳಬೇಕು.16ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.17ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.18ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು.19ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ?20ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.
21ಅನ್ಯಾಯವಾದ ನರಹತ್ಯದೋಷವನ್ನು ನಿವಾರಿಸುವುದು
1ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆ ಹೋದರೆ,2ನಿಮ್ಮ ಹಿರಿಯರೂ ಮತ್ತು ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳುವುದಕ್ಕೆ ಅಳತೆಮಾಡಬೇಕು.3ಯಾವ ಊರು ಹತ್ತಿರವಾಗಿದೆಯೋ ಆ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟಲ್ಪಡದೆಯೂ, ಯಾವ ಕೆಲಸವನ್ನೂ ಮಾಡದೆಯೂ ಇರುವ ಒಂದು ಮಣಕವನ್ನು ತೆಗೆದುಕೊಳ್ಳಬೇಕು.4ಅವರು ಅದನ್ನು ಎಂದಿಗೂ ವ್ಯವಸಾಯಕ್ಕೆ ಉಪಯೋಗಿಸದಂಥ ಅಥವಾ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.5ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲಾ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ.6ಹತನಾದ ಮನುಷ್ಯನಿಗೆ ಹತ್ತಿರವಿರುವ ಗ್ರಾಮದ ಹಿರಿಯರು, ತಗ್ಗಿನಲ್ಲಿ ಕುತ್ತಿಗೆ ಮುರಿಯಲ್ಪಟ್ಟ ಆ ಮಣಕದ ಮೇಲೆ ತಮ್ಮ ಕೈಗಳನ್ನು ತೊಳೆದುಕೊಂಡು,7<<ನಮ್ಮ ಕೈಗಳು ಈ ಹತ್ಯವನ್ನು ಮಾಡಲಿಲ್ಲ, ನಮ್ಮ ಕಣ್ಣುಗಳು ನೋಡಲಿಲ್ಲ.8ಯೆಹೋವನೇ ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷಮಿಸಬೇಕು; ಅನ್ಯಾಯವಾದ ನರಹತ್ಯದೋಷ ಫಲವು ನಿನ್ನ ಜನರಾದ ಇಸ್ರಾಯೇಲರಿಗೆ ತಗಲದಿರಲಿ>> ಎಂದು ಹೇಳಬೇಕು.9ಆಗ ಆ ರಕ್ತಾಪರಾಧವು ಕ್ಷಮಿಸಲ್ಪಡುವುದು. ಹೀಗೆ ಯೆಹೋವನ ದೃಷ್ಟಿಯಲ್ಲಿ ಸರಿಯಾದುದನ್ನು ಮಾಡುವುದರಿಂದ ನೀವೇ ಅನ್ಯಾಯವಾದ ನರಹತ್ಯದೋಷವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವಿರಿ.ಸೆರೆಯ ಸ್ತ್ರೀಯನ್ನು ಮದುವೆಮಾಡಿಕೊಳ್ಳುವ ಕ್ರಮ
10ನೀವು ಶತ್ರುಗಳೊಡನೆ ಯುದ್ಧಮಾಡಲಾಗಿ ನಿಮ್ಮ ದೇವರಾದ ಯೆಹೋವನ ಅನುಗ್ರಹದಿಂದ ಅವರನ್ನು ಸೋಲಿಸಿದಾಗ ನೀವು ಅವರನ್ನು ಸೆರೆಯಾಗಿ ಒಯ್ಯಬೇಕು.11ನಿಮ್ಮಲ್ಲಿ ಯಾವನಾದರೂ ಸೆರೆಯವರಲ್ಲಿ ಸುಂದರ ಸ್ತ್ರೀಯನ್ನು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ,12ಅವಳನ್ನು ಮನೆಗೆ ಕರೆದುಕೊಂಡು ಬರಲಿ, ತರುವಾಯ ಅವಳು ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಳ್ಳುವಳು.13ಅವಳು ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳಿನ ವರೆಗೆ ತಾಯಿ ಮತ್ತು ತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.14ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು.ಚೊಚ್ಚಲ ಮಗನ ಹಕ್ಕು
15ಯಾವನಾದರು ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ, ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭ ಬಂದಾಗ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೆ,16ತಂದೆಯಾದವನು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ತಾನು ಪ್ರೀತಿಸುವ ಹೆಂಡತಿಯ ಮಗನನ್ನೇ ಚೊಚ್ಚಲನೆಂದು ಭಾವಿಸಬಾರದು.17ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.ದುಷ್ಟಪುತ್ರನ ಶಿಕ್ಷಾಕ್ರಮ
18ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ, ಮೊಂಡನೂ ಮತ್ತು ಅವಿಧೇಯನೂ ಆಗಿ,19ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು,20ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, <<ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ>> ಎಂದು ಸಾಕ್ಷಿಹೇಳಬೇಕು.21ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.ಮರಕ್ಕೆ ತೂಗಹಾಕಲ್ಪಟ್ಟವನನ್ನು ಹೂಣಿಡುವ ಕ್ರಮ
22ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರದ ಕಂಬಕ್ಕೆ ತೂಗುಹಾಕಿದರೆ,23ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.
22ಸಿಕ್ಕಿದ ವಸ್ತುಗಳನ್ನು ಹಿಂತಿರುಗಿ ಕೊಡಬೇಕೆಂಬ ವಿಧಿ
1ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು.2ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆ ಹೋದರೆ, ಆ ಪಶುವನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ಹಿಂತಿರುಗಿ ಕೊಡಬೇಕು.3ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವಾಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ನೋಡದಂತೆ ಇರಲೇ ಬಾರದು.4ಸ್ವದೇಶದವನ ಕತ್ತೆಯಾಗಲಿ ಅಥವಾ ಎತ್ತಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಕಾಣದವರಂತೆ ಹೋಗದೆ ಅವನಿಗೆ ಸಹಾಯಮಾಡಿ ಎಬ್ಬಿಸಬೇಕು.ವಿಧವಿಧವಾದ ನೇಮಗಳು
5ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು.6ನೀವು ದಾರಿಯಲ್ಲಿ ಹೋಗುವಾಗ ಮರದ ಮೇಲಾಗಲಿ ಅಥವಾ ನೆಲದ ಮೇಲಾಗಲಿ ಇರುವ ಒಂದು ಪಕ್ಷಿಯ ಗೂಡಿನೊಳಗೆ ಮರಿಗಳು ಅಥವಾ ಮೊಟ್ಟೆಗಳು ಇದ್ದು, ಅವುಗಳ ಮೇಲೆ ತಾಯಿ ಹೊದಗಿರುವುದನ್ನು ಕಂಡರೆ ಮರಿಗಳನ್ನು ತೆಗೆದುಕೊಳ್ಳಬಹುದೇ ಹೊರತು ತಾಯಿಯನ್ನು ಹಿಡಿದುಕೊಳ್ಳಬಾರದು.7ನೀವು ಹೀಗೆ ನಡೆದುಕೊಂಡರೆ ನಿಮಗೆ ಶ್ರೇಯಸ್ಸು ಉಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.8ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.9ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು ದೇವರಿಗೆ ಸಮರ್ಪಿಸಬೇಕು.10ಎತ್ತನ್ನೂ ಮತ್ತು ಕತ್ತೆಯನ್ನೂ ಜೊತೆಮಾಡಿ ನೇಗಿಲಿಗೆ ಕಟ್ಟಿ ಉಳಬಾರದು.11ನಾರು ಹಾಗು ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.12ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು.ಹೆಂಡತಿಯನ್ನು ಪರಿತ್ಯಾಗಮಾಡುವವನ ವಿಷಯದಲ್ಲಿ ಕ್ರಮ
13ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯನ್ನು ದ್ವೇಷಿಸಿ, ಅವಳ ವಿಷಯದಲ್ಲಿ ಇಲ್ಲಸಲ್ಲದ ಕೆಟ್ಟ ಮಾತುಗಳನ್ನು ಆಡಿ,14<<ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಇವಳೊಡನೆ ಸಂಗಮಿಸಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು>> ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ,15ಅವಳ ತಾಯಿ ತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕವಿಲ್ಲದವಳು ಎಂಬುವುದಕ್ಕೆ ನಿದರ್ಶನವನ್ನು ಊರ ಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು.16ಆ ಸ್ತ್ರೀಯ ತಂದೆ ಅವರಿಗೆ, <<ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟ ಮೇಲೆ17ಇವನು ಅವಳನ್ನು ದ್ವೇಷಿಸಿ, ಪರಪುರುಷನ ಸಂಪರ್ಕ ಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳ ಹೆಸರನ್ನು ಅವಮಾನಪಡಿಸುತ್ತಾನೆ. ಇಗೋ ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುವುದಕ್ಕೆ ಇದೇ ಪ್ರಮಾಣ>> ಎಂದು ಹೇಳಿ ಅವಳ ಹೊದಿಕೆಯನ್ನು ಆ ಊರಿನ ಹಿರಿಯರ ಮುಂದೆ ಇಡಬೇಕು.18ಆ ಊರಿನ ಹಿರಿಯರು ಅವನನ್ನು ಹಿಡಿಸಿ ಅವನನ್ನು ಹೊಡಿಸಬೇಕು.19ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.ದುರಾಚಾರಿಯಾದ ಸ್ತ್ರೀಗೆ ಆಗಬೇಕಾದ ಶಿಕ್ಷೆ
20ಆದರೆ ಆ ಹೆಣ್ಣು ವಿವಾಹಕ್ಕೆ ಮುಂಚೆ ದೈಹಿಕವಾಗಿ ಪುರುಷಸಂಪರ್ಕ ಮಾಡಿದ್ದು ನಿಜ ಎಂದು ತಿಳಿದುಬಂದರೆ,21ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.ಪರಸ್ತ್ರೀಯನ್ನು ಮಾನಭಂಗಪಡಿಸಿದವನಿಗೆ ಆಗಬೇಕಾದ ಶಿಕ್ಷೆ
22ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.23ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರೂ ಊರೊಳಗೆ ಮರುಳುಗೊಳಿಸಿ ಸಂಗಮಿಸಿದರೆ,24ನೀವು ಅವರಿಬ್ಬರನ್ನೂ ಊರುಬಾಗಲಿನ ಹೊರಕ್ಕೆ ತರಿಸಿ ಅವರನ್ನು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.25ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.26ಆ ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಈ ಸಂಗತಿಯೂ ಹಾಗೆಯೇ ಎಂದು ತಿಳಿಯಬೇಕು.27ಆ ಸ್ತ್ರೀಯು ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಗಿಕೊಂಡರೂ ತಪ್ಪಿಸುವವರು ಇರಲಿಲ್ಲ.28ಯಾರಿಗೂ ನಿಶ್ಚಯವಾಗದೆ ಇರುವ ಸ್ತ್ರೀಯನ್ನು ಒಬ್ಬನು ಹಿಡಿದು ಸಂಗಮಿಸಿದ್ದು ತಿಳಿದು ಬಂದರೆ,29ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.ಮಲತಾಯಿಯ ಸಂಗನಿಷೇಧ
30 ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇ ಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು.
23ಸಭೆಯಿಂದ ಬಹಿಷ್ಕಾರ ಮಾಡುವುದರ ವಿಷಯ
1ಬೀಜಹೊಡಿಸಿಕೊಂಡವರು ಅಥವಾ ರಹಸ್ಯಾಂಗವನ್ನು ಛೇದಿಸಿಕೊಂಡವರು ಯೆಹೋವನ ಸಭೆಯಲ್ಲಿ ಸೇರಬಾರದು.2ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲೆಯವರಾದರೂ ಅವರು ಯೆಹೋವನ ಸಭೆಗೆ ಸೇರಬಾರದು.3ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.4ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.5ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.6ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು.7ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.8ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಯೆಹೋವನ ಸಭೆಗೆ ಸೇರಬಹುದು.ಯುದ್ಧಕಾಲದಲ್ಲಿ ಪಾಳೆಯವು ನಿರ್ಮಲವಾಗಿರಬೇಕೆಂಬ ನಿಯಮ
9ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು.10ರಾತ್ರಿಕಾಲದಲ್ಲಿ ವೀರ್ಯಸ್ಖಲನದಿಂದ ಯಾವನಾದರೂ ಅಶುದ್ಧನಾದರೆ, ಅವನು ಪಾಳೆಯದೊಳಗೆ ಇರದೆ ಹೊರಗೆ ಇರಬೇಕು.11ಅವನು ಸಂಜೆಯ ವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಳುಗಿದ ಮೇಲೆ ಪಾಳೆಯದೊಳಗೆ ಬರಬಹುದು.12ಪಾಳೆಯದ ಹೊರಗೆ ಪಾಯಖಾನೆಗಾಗಿ ಒಂದು ಸ್ಥಳವನ್ನು ಗೊತ್ತುಮಾಡಬೇಕು.13ಯುದ್ಧದ ಸಾಮಾನುಗಳಲ್ಲದೆ ನಿಮ್ಮ ಬಳಿಯಲ್ಲಿ ಸಲಿಕೆ ಇರಬೇಕು; ನೀವು ಬಹಿರ್ಭೂಮಿಗೆ ಹೋದಾಗ ಆ ಸಲಿಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು.14ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.ತಪ್ಪಿಸಿಕೊಂಡ ದಾಸರನ್ನು ದಣಿಗೆ ವಶಪಡಿಸಬಾರದೆಂಬ ವಿಧಿ
15ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.16ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನಿರ್ಬಂಧಪಡಿಸಬಾರದು ಹಾಗೂ ನೀವು ಅವನನ್ನು ಮತ್ತೆ ಶೋಷಣೆಗೆ ಗುರಿಮಾಡಬಾರದು.ವ್ಯಭಿಚಾರ ನಿಷಿದ್ಧವಾದದ್ದು
17ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಅಂತಹ ವೇಶ್ಯೆತನಕ್ಕೆ ಇಳಿಯಬಾರದು.18ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.ಸ್ವದೇಶದವನಿಂದ ಬಡ್ಡಿ ತೆಗೆದುಕೊಳ್ಳಬಾರದೆಂಬ ವಿಧಿ
19ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವುದನ್ನಾಗಲಿ ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು.20ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.ಹರಕೆಯನ್ನು ನೆರವೇರಿಸಬೇಕೆಂಬ ವಿಧಿ
21ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.22ನೀವು ಹರಕೆಮಾಡದಿದ್ದರೆ ದೋಷವೇನೂ ಇರಲಿಲ್ಲ;23ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.ಮತ್ತೊಬ್ಬನ ಬೆಳೆಯ ವಿಷಯದಲ್ಲಿ ನಡೆದುಕೊಳ್ಳತಕ್ಕ ಕ್ರಮ
24ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರವಾಗಿ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತುಂಬಿಕೊಂಡು ಹೋಗಬಾರದು.25ಮತ್ತೊಬ್ಬನ ಪೈರಿನಲ್ಲಿ ಹೋಗುತ್ತಿರುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದೇ ಹೊರತು ಆ ಪೈರಿಗೆ ಕುಡುಗೋಲು ಹಾಕಬಾರದು.
24ಪರಿತ್ಯಾಗಮಾಡಿದ ಹೆಂಡತಿಯನ್ನು ಪುನಃ ಪರಿಗ್ರಹಿಸಬಾರದು
1ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.2ಅವಳು ಮನೆಯಿಂದ ಹೋಗಿ ಮತ್ತೊಬ್ಬನನ್ನು ಮದುವೆಯಾಗಬಹುದು.3ಆಕೆ ಎರಡನೆಯ ಗಂಡನಿಂದಲೂ ತಿರಸ್ಕರಿಸಲ್ಪಟ್ಟು, ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಎರಡನೆಯ ಗಂಡನು ಸತ್ತರೆ,4ಆಗ ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ತನ್ನ ಹೆಂಡತಿಯಾಗಿ ಸ್ವೀಕರಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಸ್ವೀಕರಿಸುವುದು ಯೆಹೋವನಿಗೆ ಅಸಹ್ಯ ಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶಕೊಡಬಾರದು.ಹೊಸದಾಗಿ ಮದುವೆಮಾಡಿಕೊಂಡವರ ನಿಯಮ
5ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದ ವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.ವಿವಿಧ ನಿಯಮಗಳು ಮತ್ತು ಸುಧಾರಣೆಗಳು
6ಬೀಸುವ ಕಲ್ಲನ್ನು ಪೂರ್ತಿಯಾಗಲಿ ಅಥವಾ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವುದು.7ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.8ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.9ನೀವು ಐಗುಪ್ತದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಯೆಹೋವನು ಮಿರ್ಯಾಮಳಿಗೆ ಮಾಡಿದ್ದನ್ನು ನೆನಪುಮಾಡಿಕೊಳ್ಳಿರಿ.10ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವುದಕ್ಕೆ ಅವನ ಮನೆಯೊಳಕ್ಕೆ ಹೋಗದೆ ಹೊರಗೆ ಇರಬೇಕು.11ಸಾಲತೆಗೆದುಕೊಂಡವನೇ ಒತ್ತೆಯ ಸಾಮಾನುಗಳನ್ನು ತಂದುಕೊಡಬೇಕು.12ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ ಹೊತ್ತುಮುಣುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು.13ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.14ನೀವು ಸ್ವದೇಶದವರಲ್ಲಿಯಾಗಲಿ ಅಥವಾ ನಿಮ್ಮಲ್ಲಿರುವ ಅನ್ಯದೇಶದವರಲ್ಲಿಯಾಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ15ಏನೂ ಅನ್ಯಾಯಮಾಡದೆ ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಣುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರುನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.16ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.17ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.18ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬುವುದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.19ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.20ಎಣ್ಣೆಯಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.21ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.22ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ.
25ಅಪರಾಧಿಗೆ ಆಗಬೇಕಾದ ಶಿಕ್ಷೆ
1ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ, ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.2ಅಪರಾಧಿಗೆ ಪೆಟ್ಟಿನ ಶಿಕ್ಷೆ ತೀರ್ಮಾನವಾದರೆ ನ್ಯಾಯಾಧಿಪತಿಯು ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.3ಪೆಟ್ಟುಗಳ ಶಿಕ್ಷೆಯು ನಲ್ವತ್ತಕ್ಕಿಂತ ಹೆಚ್ಚಿರಬಾರದು. ಅದಕ್ಕಿಂತ ಹೆಚ್ಚು ಪೆಟ್ಟುಗಳನ್ನು ನೀವು ಹೊಡಿಸಿದರೆ ನಿಮ್ಮ ಸ್ವದೇಶದವನನ್ನು ನೀವು ಕೇವಲ ನೀಚನನ್ನಾಗಿ ಕಂಡಂತೆ ಆಗುವುದು.4ಕಣತುಳಿಯುವ ಎತ್ತಿನ ಬಾಯಿಯನ್ನು ಕಟ್ಟಬಾರದು.ಮೈದುನನಿಂದ ವಂಶಾಭಿವೃದ್ಧಿ ಆಗಬೇಕೆಂಬ ವಿಷಯ
5ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು.6ಅವಳಲ್ಲಿ ಹುಟ್ಟುವ ಚೊಚ್ಚಲಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು. ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರೊಳಗಿಂದ ಅಳಿಸಿ ಹೋಗುವುದಿಲ್ಲ.7ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸದೆ ಹೋದರೆ ಅವಳು ಊರ ಬಾಗಿಲಿಗೆ ಹೋಗಿ ಅಲ್ಲಿಯ ಹಿರಿಯರಿಗೆ, <<ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸುವುದಕ್ಕೆ ಸಿದ್ಧನಿಲ್ಲ. ಅವನು ಮೈದುನಧರ್ಮವನ್ನು ನಡೆಸುವುದಿಲ್ಲ ಅನ್ನುತ್ತಾನೆ>> ಎಂದು ತಿಳಿಸಬೇಕು.8ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, <<ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ>> ಎಂದು ಹೇಳುವ ಪಕ್ಷಕ್ಕೆ,9ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, <<ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ>> ಎಂದು ಹೇಳಬೇಕು.10ಇಸ್ರಾಯೇಲರಲ್ಲಿ ಆ ಮನುಷ್ಯನ ಮನೆಯವರಿಗೆ, <<ಕೆರವನ್ನು ಬಿಚ್ಚಿಸಿಕೊಂಡವನ ಮನೆಯವರು>> ಎಂದು ಹೆಸರುಂಟಾಗುವುದು.ಲಜ್ಜಾಹೀನಳಿಗೆ ಆಗಬೇಕಾದ ಶಿಕ್ಷೆ
11ಇಬ್ಬರು ಜಗಳವಾಡುತ್ತಿರಲಾಗಿ ಅವರಲ್ಲಿ ಒಬ್ಬನ ಹೆಂಡತಿ ಬಂದು ತನ್ನ ಗಂಡನನ್ನು ಬಿಡಿಸಬೇಕೆಂದು ಆ ಪರಪುರುಷನ ಜನನೇಂದ್ರಿಯವನ್ನು ಹಿಡಿದುಕೊಂಡರೆ,12ಅವನು ಅವಳನ್ನು ಕನಿಕರಿಸದೆ ಅವಳ ಕೈಯನ್ನು ಕಡಿದುಹಾಕಬೇಕು.ವ್ಯಾಪಾರದ ಅಳತೆತೂಕಗಳ ವಿಧಿ
13ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಳ್ಳಬಾರದು.14ಹೆಚ್ಚುಕಡಿಮೆಯಾದ ಎರಡು ವಿಧವಾದ ಸೇರುಗಳು ಹಾಗೂ ಮೋಸ ಮಾಡುವ ತೂಕದ ಕಲ್ಲುಗಳು ನಿಮ್ಮ ಮನೆಯಲ್ಲಿ ಇರಬಾರದು.15ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.16ನ್ಯಾಯವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರೂ ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರಾಗಿದ್ದಾರೆ.ಅಮಾಲೇಕ್ಯರನ್ನು ಸಂಹಾರಮಾಡಬೇಕೆಂಬ ವಿಧಿ
17ನೀವು ಐಗುಪ್ತದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿರಿ.18ಅವರು ದೇವರಲ್ಲಿ ಸ್ವಲ್ಪವೂ ಭಯಭಕ್ತಿಯಿಲ್ಲದವರಾಗಿ, ನೀವು ದಣಿದು ಮತ್ತು ಬಳಲಿದಾಗ ನಿಮ್ಮವರಲ್ಲಿ ಹಿಂದೆಬಿದ್ದ ಬಲಹೀನರನ್ನು ಸಂಹಾರ ಮಾಡಿದರು.19ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.
26ಪ್ರಥಮಫಲಗಳ ಸಮರ್ಪಣೆ
1ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವನ್ನು ನೀವು ಸೇರಿ, ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ,2ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.3ನೀವು ಅದನ್ನು ತೆಗೆದುಕೊಂಡುಹೋಗಿ ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ, <<ಯೆಹೋವನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಾವು ಸೇರಿದ್ದಾಯಿತೆಂದು ನೀನು ಸೇವಿಸುವ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾವು ಈಗ ಒಪ್ಪಿಕೊಂಡಿದ್ದೇವೆ>> ಎಂದು ಹೇಳಬೇಕು.4ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮುಂದೆ ಇಡುವನು.5ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, <<ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.6ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.7ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ, ನಮ್ಮ ದುರವಸ್ಥೆಯನ್ನೂ, ಕಷ್ಟವನ್ನೂ ಮತ್ತು ಉಪದ್ರವವನ್ನೂ ನೋಡಿದನು.8ಆತನು ತನ್ನ ಭುಜಬಲವನ್ನೂ, ಶಿಕ್ಷಾಹಸ್ತವನ್ನೂ, ಮಹಾಭೀತಿಗಳನ್ನೂ, ಮಹತ್ಕಾರ್ಯಗಳನ್ನೂ ಮತ್ತು ಸೂಚಕಕಾರ್ಯಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದನು.9ಅವನು ನಮ್ಮನ್ನು ಐಗುಪ್ತದೇಶದಿಂದ ಕರೆತಂದು ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ.10ಆದುದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ, ಅದನ್ನು ಸ್ವೀಕರಿಸಬೇಕು>> ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು.11ಆತನು ನಿಮಗೂ ಮತ್ತು ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ, ಲೇವಿಯರೂ ಮತ್ತು ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.ಪ್ರತಿ ಮೂರನೆ ವರ್ಷದಲ್ಲಿ ದಶಮಾಂಶವನ್ನು ಸಮರ್ಪಿಸುವ ಕ್ರಮ
12ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.13ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, <<ನಾವು ಪ್ರತ್ಯೇಕಿಸಿದ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದಿದ್ದೇವೆ. ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರು, ಪರದೇಶಿಗಳು, ಅನಾಥರು, ವಿಧವೆಯರು ಇಂಥವರಿಗೆ ಕೊಟ್ಟಿದ್ದೇವೆ ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ ಮತ್ತು ಮರೆಯಲೂ ಇಲ್ಲ.14ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.15ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ>> ಎಂದು ಹೇಳಬೇಕು.ಯೆಹೋವನು ಇಸ್ರಾಯೇಲರೊಡನೆ ಮಾಡಿಕೊಂಡ ಒಡಂಬಡಿಕೆ
16ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಆಜ್ಞಾಪಿಸಿದ್ದಾನೆ. ಆದುದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.17ನಮಗೆ ಯೆಹೋವನೇ ದೇವರಾಗಿರುವನೆಂದೂ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿಯಮಗಳನ್ನು ಕೈಕೊಂಡು, ಆತನ ಮಾತಿಗೆ ಲಕ್ಷ್ಯವಿಡುವೆವು ಎಂದು ನೀವು ಈಗ ಒಡಂಬಟ್ಟಿದ್ದೀರಿ.18ಯೆಹೋವನೋ ನಿಮ್ಮ ವಿಷಯದಲ್ಲಿ, <<ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ19ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು>> ಎಂದು ಒಪ್ಪಿಕೊಂಡಿದ್ದಾನೆ.
27ಕಲ್ಲಿನ ಕಂಬಗಳ ಮೇಲೆ ಕೆತ್ತಿಸಬೇಕಾದ ಧರ್ಮಶಾಸ್ತ್ರವಾಕ್ಯಗಳು
1ಮೋಶೆ ಮತ್ತು ಇಸ್ರಾಯೇಲರ ಹಿರಿಯರ ಸಹಿತ ಜನರಿಗೆ, <<ನಾನು ಈಗ ನಿಮಗೆ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.2ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.3ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.4ನೀವು ಯೊರ್ದನ್ ನದಿಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.5<<ಅಲ್ಲಿ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಲ್ಲುಗಳಿಂದ ಯಜ್ಞವೇದಿಯನ್ನು ಕಟ್ಟಿಸಬೇಕು.6ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು.7ಅಲ್ಲಿ ಸರ್ವಾಂಗಹೋಮಗಳನ್ನೂ ಮತ್ತು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಸಹಭೋಜನಮಾಡಿ, ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.8ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಸ್ಪಷ್ಟವಾಗಿ ಬರೆಯಬೇಕು>> ಎಂದು ಆಜ್ಞಾಪಿಸಿದನು.9ಮೋಶೆ, ಯಾಜಕರು ಮತ್ತು ಲೇವಿಯರೊಡನೆ ಇಸ್ರಾಯೇಲರೆಲ್ಲರಿಗೆ, <<ಇಸ್ರಾಯೇಲರೇ, ನಿಶ್ಯಬ್ದವಾಗಿದ್ದು ಕೇಳಿರಿ, ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾಗಿದ್ದೀರಷ್ಟೆ.10ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು>> ಎಂದು ಹೇಳಿದನು.ಅವಿಧೇಯರಿಗೆ ಶಾಪಗಳು
11ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ,12<<ನೀವು ಯೊರ್ದನ್ ನದಿಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನ್ ಎಂಬ ಈ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.13ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಎಂಬ ಈ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.14<<ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲರೆಲ್ಲರಿಗೂ,15<ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು> ಎಂದು ಹೇಳಲು ಜನರೆಲ್ಲರೂ, <ಆಮೆನ್> >> ಅನ್ನಬೇಕು.16<<ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು>> ಎಂದು ಹೇಳಲು ಜನರೆಲ್ಲರೂ, <<ಆಮೆನ್>> ಅನ್ನಬೇಕು.17<<ಅವರು, ಮತ್ತೊಬ್ಬನ ಗಡಿಮೇರೆಯನ್ನು ಮೀರಿಬಂದವನು ಶಾಪಗ್ರಸ್ತನು>> ಎಂದು ಹೇಳಲು, <<ಆಮೆನ್>> ಅನ್ನಬೇಕು.18<<ಅವರು, ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತನು>> ಎಂದು ಹೇಳಲು, <<ಆಮೆನ್>> ಅನ್ನಬೇಕು.19<<ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು>> ಎಂದು ಹೇಳಲು ಜನರೆಲ್ಲರೂ, <<ಆಮೆನ್>> ಅನ್ನಬೇಕು.20<<ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು>> ಎಂದು ಹೇಳಲು ಜನರೆಲ್ಲರೂ, <<ಆಮೆನ್>> ಅನ್ನಬೇಕು.21<<ಅವರು, ಪಶುಸಂಗಮ ಮಾಡಿದವನು ಶಾಪಗ್ರಸ್ತನು>> ಎಂದು ಹೇಳಲು ಜನರೆಲ್ಲರೂ, <<ಆಮೆನ್>> ಅನ್ನಬೇಕು.22<<ಅವರು, ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತನು>> ಎಂದು ಹೇಳಲು ಜನರೆಲ್ಲರೂ, <<ಆಮೆನ್>> ಅನ್ನಬೇಕು.23<<ಅವರು, ಅತ್ತೆಯನ್ನು ಸಂಗಮಿಸಿದವನು ಶಾಪಗ್ರಸ್ತನು>> ಎಂದು ಹೇಳಲು ಜನರೆಲ್ಲರೂ, <<ಆಮೆನ್>> ಅನ್ನಬೇಕು.24<<ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು>> ಎಂದು ಹೇಳಲು ಜನರೆಲ್ಲರೂ, <<ಆಮೆನ್>> ಅನ್ನಬೇಕು.25<<ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು>> ಎನ್ನಲಾಗಿ ಜನರೆಲ್ಲರೂ, <<ಆಮೆನ್>> ಅನ್ನಬೇಕು.26<<ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು>> ಎಂದು ಹೇಳಲು ಜನರೆಲ್ಲರೂ, <<ಆಮೆನ್>> ಅನ್ನಬೇಕು.
28ವಿಧೇಯತೆಯಿಂದ ಸಿಕ್ಕುವ ಆಶೀರ್ವಾದಗಳು
1ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.2ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ಅವು ಯಾವುವೆಂದರೆ:3ನಿಮಗೆ ಊರಿನಲ್ಲಿಯೂ ಮತ್ತು ಹೊಲದಲ್ಲಿಯೂ ಶುಭವುಂಟಾಗುವುದು.4ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.5ನಿಮ್ಮ ಪುಟ್ಟಿಗಳಿಗೂ ಮತ್ತು ಕೊಣವಿಗೆಗಳಿಗೂ ಶುಭವುಂಟಾಗುವುದು.6ನೀವು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ಶುಭವುಂಟಾಗುವುದು.7ನಿಮ್ಮ ವಿರುದ್ಧವಾಗಿ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು; ಅವರು ಒಂದೇ ದಾರಿಯಿಂದ ನಿಮ್ಮ ವಿರುದ್ಧವಾಗಿ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.8ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ಮತ್ತು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.9ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ, ಆತನು ವಾಗ್ದಾನಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು.10ಭೂಮಿಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.11ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳಲ್ಲಿ ಸಮೃದ್ಧಿಯನ್ನು ಉಂಟುಮಾಡುವನು.12ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.13ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೇ ಲಕ್ಷ್ಯವಿಟ್ಟು ಕೇಳಿದರೆ, ನೀವು ಎಲ್ಲರಿಗಿಂತಲೂ ಮೇಲಿನವರಾಗಿರುವಿರೇ ಹೊರತು ಇತರರಿಗೆ ಅಧೀನರಾಗುವುದಿಲ್ಲ.14ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ಬಿಟ್ಟು ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು.ಅವಿಧೇಯತ್ವದಿಂದ ಉಂಟಾಗುವ ಶಾಪಗಳು
15ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:16ನಿಮಗೆ ಊರಿನಲ್ಲಿಯೂ ಮತ್ತು ಅಡವಿಯಲ್ಲಿಯೂ ಶಾಪ ಉಂಟಾಗುವುದು.17ನಿಮ್ಮ ಪುಟ್ಟಿಗಳಿಗೂ ಮತ್ತು ಕೊಣವಿಗೆಗಳಿಗೂ ಶಾಪ ಉಂಟಾಗುವುದು.18ನಿಮ್ಮ ಸಂತಾನ, ವ್ಯವಸಾಯ, ದನ ಮತ್ತು ಕುರಿಗಳಿಗೂ ಶಾಪ ಉಂಟಾಗುವುದು.19ನೀವು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ಶಾಪ ಉಂಟಾಗುವುದು.20ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟಿದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನು ಉಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.21ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.22ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.23ಮೇಲೆ ಆಕಾಶವು ಮಳೆಸುರಿಸದೆ ತಾಮ್ರದಂತೆಯೂ ಮತ್ತು ಕೆಳಗೆ ಭೂಮಿಯು ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು.24ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳನ್ನೂ ಮತ್ತು ಉಸುಬನ್ನೂ ನಿಮ್ಮ ಮೇಲೆ ಸುರಿಸುವನು; ಅದುದರಿಂದ ನೀವು ನಾಶವಾಗಿ ಹೋಗುವಿರಿ.25ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.26ನಿಮ್ಮ ಹೆಣಗಳು ಪಕ್ಷಿಗಳಿಗೂ ಮತ್ತು ಕಾಡು ಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.27ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.28ಚಿತ್ತಭ್ರಮಣೆ, ಕುರುಡುತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.29ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ.30ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.31ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಮುಂದೆಯೇ ಬಲಾತ್ಕಾರದಿಂದ ಹಿಡಿದುಕೊಂಡುಹೋಗುವರು. ಕೇಳಿದರೆ ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡು ಮತ್ತು ಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.32ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಪ್ರಯತ್ನವೇನೂ ಸಾಗುವುದಿಲ್ಲ.33ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,34ನಿಮ್ಮ ಮುಂದೆ ನಡೆಯುವ ಸಂಗತಿಗಳ ದೆಸೆಯಿಂದ ಹುಚ್ಚರಾಗಿ ಹೋಗುವಿರಿ.35ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯ ವರೆಗೂ ವಾಸಿಯಾಗದ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು.36ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.37ಯೆಹೋವನು ನಿಮ್ಮನ್ನು ನಡೆಸುವ ಜನಾಂಗಗಳಲ್ಲಿ ನೀವು ಭೀಕರತೆಗೂ, ಗಾದೆಗೂ ಮತ್ತು ಪರಿಹಾಸ್ಯಕ್ಕೂ ಗುರಿಯಾಗುವಿರಿ.38ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.39ನೀವು ದ್ರಾಕ್ಷಿ ವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವುದರಿಂದ ನೀವು ಅದರ ಸಾರವನ್ನು ರುಚಿನೋಡಲು ಆಗುವುದಿಲ್ಲ.40ನಿಮ್ಮ ಎಲ್ಲಾ ಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವುದರಿಂದ ನೀವು ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವುದಿಲ್ಲ.41ನಿಮಗೆ ಗಂಡು ಮತ್ತು ಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವುದರಿಂದ ನಿಮ್ಮ ಬಳಿಯಲ್ಲಿ ಇರುವುದಿಲ್ಲ.42ನಿಮ್ಮ ಎಲ್ಲಾ ಮರಗಳೂ ಮತ್ತು ಪೈರುಗಳೂ ಮಿಡತೆಯ ಪಾಲಾಗುವವು.43ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.44ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಕೊಡುವುದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ನಿಮಗೆ ಶಿರಸ್ಸಾಗುವರು.45ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ, ಆತನು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.46ಇವು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ ಎಲ್ಲರಿಗೂ ಎಚ್ಚರಿಕೆಯನ್ನೂ ಮತ್ತು ಬೆರಗನ್ನೂ ಉಂಟುಮಾಡುವವು.47ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆ ಹೋದುದರಿಂದ,48ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.49ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.50ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.51ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.52ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.53ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಮತ್ತು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.54ನಿಮ್ಮಲ್ಲಿ ಮೃದುಸ್ವಭಾವಿಯೂ ಮತ್ತು ಸೂಕ್ಷ್ಮಗುಣವುಳ್ಳವನು ಆಗಿರುವ ಸಹೋದರನು ಆಹಾರಕ್ಕಾಗಿ ತನ್ನ ಸಹೋದರ, ಪ್ರೀತಿಯ ಹೆಂಡತಿ ಮತ್ತು ತನ್ನ ಮಕ್ಕಳನ್ನು ದ್ವೇಷಿಸುವನು.55ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ತನಗೆ ತಿನ್ನಲಿಕ್ಕೆ ಏನೂ ಉಳಿಯದೆ ಹೋಗುವುದರಿಂದ ಅವನು ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ, ಪ್ರಾಣಪ್ರಿಯಳಾದ ಹೆಂಡತಿಗೂ ಮತ್ತು ಉಳಿದ ಮಕ್ಕಳಿಗೂ ಕೋಪಗೊಂಡವನಂತೆ ನಟಿಸುತ್ತಾ ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.56ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ, ನಿಮ್ಮನ್ನು ಬಹಳವಾಗಿ ಹಿಂಸಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸೂಕ್ಷ್ಮತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ, ನರಳುವಾಗ57ತಾನು ಆಗಲೇ ಹೆತ್ತ ಮಗುವಿನ ಮಾಂಸವನ್ನೂ ರಹಸ್ಯವಾಗಿ ತಿನ್ನಬೇಕೆಂದು ಯೋಚಿಸಿ, ಪ್ರಾಣಪ್ರಿಯನಾದ ಗಂಡನಿಗೂ, ಮಕ್ಕಳಿಗೂ ತಿಳಿಯದಂತೆ ಆ ಕಾರ್ಯವನ್ನು ಮಾಡುವಳು.58ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ,59ಆತನು ನಿಮಗೂ, ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು.60ನೀವು ಹೆದರಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರುಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಅಂಟಿಕೊಂಡೇ ಇರುವವು.61ಇಷ್ಟು ಮಾತ್ರವಲ್ಲದೆ ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ಮತ್ತು ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವನು.62ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆ ಹೋಗುವುದರಿಂದ ಸ್ವಲ್ಪ ಜನರಾಗಿಯೇ ಉಳಿಯುವಿರಿ.63ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.64ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.65ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.66ಬದುಕುವೆವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ಹಗಲಿರುಳು ಪ್ರಾಣಭಯದಲ್ಲಿರುವಿರಿ; ಪ್ರಾಣದ ಮೇಲಣ ನಂಬಿಕೆಯನ್ನು ಬಿಟ್ಟೇಬಿಡುವಿರಿ.67ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವುದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದಲೂ ನೀವು ಹೊತ್ತಾರೆಯಲ್ಲಿ, <<ಅಯ್ಯೋ, ಅಯ್ಯೋ ಸಾಯಂಕಾಲ ಯಾವಾಗ ಬರುವುದೋ>> ಎಂದೂ, ಸಾಯಂಕಾಲದಲ್ಲಿ, <<ಅಯ್ಯೋ, ಅಯ್ಯೋ! ಬೆಳಿಗ್ಗೆ ಯಾವಾಗ ಬರುವುದೋ>> ಎಂದು ಕೊರಗುವಿರಿ.68ನೀವು ಐಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.
29ಮೋಶೆಯ ಮೂರನೆಯ ಉಪನ್ಯಾಸ - ಒಡಂಬಡಿಕೆ
1ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು.2ಮೋಶೆ ಇಸ್ರಾಯೇಲರನ್ನು ಕರೆದು, <<ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಮುಂದೆ ಫರೋಹನಿಗೂ, ಅವನ ಪರಿವಾರದವರಿಗೂ ಮತ್ತು3ಸಮಸ್ತ ಪ್ರಜೆಗಳಿಗೂ ಮಾಡಿದವುಗಳನ್ನು ನೋಡಿದ್ದೀರಿ. ಮಹಾಪರಿಶೋಧನೆ, ಉತ್ಪಾತ ಮತ್ತು ಮಹತ್ಕಾರ್ಯಗಳನ್ನು ನೀವು ನೋಡೇ ನೋಡಿದ್ದೀರಿ.4ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ.5ನಲ್ವತ್ತು ವರ್ಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪು ಹರಿಯಲ್ಲಿಲ್ಲ ಅಥವಾ ಕಾಲಿನಲ್ಲಿದ್ದ ಕೆರವಾಗಲಿ ಸವೆದು ಹೋಗಲಿಲ್ಲ;6ನೀವು ರೊಟ್ಟಿಯನ್ನು ತಿನ್ನಲಿಲ್ಲ, ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.7ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬರಲಾಗಿ ನಾವು ಅವರನ್ನು ಸೋಲಿಸಿದೆವು.8ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ, ಗಾದ್ಯರಿಗೂ ಹಾಗು ಮನಸ್ಸೆ ಕುಲದವರಲ್ಲಿ ಅರ್ಧಜನರಿಗೂ ಸ್ವತ್ತಾಗಿ ಕೊಟ್ಟೆವಷ್ಟೆ.9ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡಿಸುವ ಎಲ್ಲಾ ಕೆಲಸಗಳಲ್ಲಿಯೂ ಜಾಣರಾಗಿ ಅಭಿವೃದ್ಧಿಹೊಂದುವಿರಿ.10ಇಸ್ರಾಯೇಲ್ ಪುರುಷರೇ, ನೀವೆಲ್ಲರೂ ಈಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,11ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆ ಒಡೆಯುವವರು ಮತ್ತು ನೀರು ಸೇದುವವರು ಮುಂತಾದ ಆಳುಗಳು,12ಹೀಗೆ ನಿಮ್ಮೆಲ್ಲರ ಸಂಗಡ ಈ ಹೊತ್ತು ನಿಮ್ಮ ದೇವರಾದ ಯೆಹೋವನು ಪ್ರಮಾಣಪೂರ್ವಕವಾಗಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಾನೆ. ನೀವು ಅದರಲ್ಲಿ ಸೇರುವುದಕ್ಕಾಗಿ ಕೂಡಿಬಂದಿದ್ದೀರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ,13ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ವಾಗ್ದಾನ ಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ, ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುತ್ತಾನೆ.14<<ಆತನು ಈ ಒಡಂಬಡಿಕೆಯನ್ನು ಕೇವಲ ನಮ್ಮೊಡನೆ ಮಾಡಿಕೊಳ್ಳುವುದಿಲ್ಲ.15ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮತ್ತು ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ.16ನಾವು ಐಗುಪ್ತದೇಶದಲ್ಲಿ ವಾಸಮಾಡಿದ್ದೂ ಹಾಗೂ ಅನೇಕ ಜನಾಂಗಗಳ ಪ್ರದೇಶಗಳನ್ನು ದಾಟಿಬಂದದ್ದೂ ನಿಮಗೆ ತಿಳಿದೇ ಇದೆ.17ಆ ಜನಾಂಗಗಳಲ್ಲಿ ನಡೆಯುವ ಅಸಹ್ಯವಾದ ಆಚಾರಗಳನ್ನೂ ಹಾಗು ಅವರು ಮರ, ಕಲ್ಲು, ಬೆಳ್ಳಿ ಮತ್ತು ಬಂಗಾರ ಇವುಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೋಡಿದ್ದೀರಿ.18<<ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.19ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, <ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು> ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.20ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.21ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಯೆಹೋವನು ಅವನನ್ನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಪ್ರತ್ಯೇಕಿಸಿ ದಂಡಿಸುವನು.22<<ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗ ಮತ್ತು ಉಪದ್ರವಗಳನ್ನು ಕಂಡು ಆಶ್ಚರ್ಯಪಡುವರು.23ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,24<ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು?> ಎಂಬುದಾಗಿ ವಿಚಾರಿಸುವರು.25ಅದಕ್ಕೆ ಜನರು, <ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.26ಅವರು ತಮಗೆ ನೇಮಿಸಲ್ಪಡದೆಯೂ ಮತ್ತು ಗೊತ್ತಿಲ್ಲದೆಯೂ ಇದ್ದ ಇತರ ದೇವರುಗಳನ್ನು ಸೇವಿಸಿ ಪೂಜಿಸಿದ್ದರಿಂದ,27ಯೆಹೋವನು ಅವರ ದೇಶದ ಮೇಲೆ ಕೋಪಮಾಡಿ, ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದನು.28ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು> ಎಂದು ಉತ್ತರ ಕೊಡುವರು.29<<ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.>>
30ಯೆಹೋವನ ಕಡೆಗೆ ತಿರುಗಿಕೊಳ್ಳುವುದರಿಂದ ಉಂಟಾಗುವ ಆಶೀರ್ವಾದಗಳು
1ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,2ನಿಮ್ಮ ಮಕ್ಕಳ ಸಹಿತವಾಗಿ ನಿಮ್ಮ ದೇವರಾದ ಯೆಹೋವನ ಆಶ್ರಯಕ್ಕೆ ತಿರುಗಿ ಬಂದು, ನಾನು ಈಗ ನಿಮಗೆ ಬೋಧಿಸುವ ಆತನ ಮಾತುಗಳಿಗೆ ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ವಿಧೇಯರಾದರೆ,3ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು.4ನಿಮ್ಮಲ್ಲಿ ಯಾರಾದರೂ ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟರೂ, ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರೆದುಕೊಂಡು ಬರುವನು.5ನಿಮ್ಮ ಪೂರ್ವಿಕರಿಗೆ ಸ್ವತ್ತಾಗಿದ್ದ ದೇಶದಲ್ಲಿ ಸೇರಿಸಿ, ಅದು ನಿಮಗೂ ಸ್ವದೇಶವಾಗುವಂತೆ ಮಾಡಿ, ನಿಮಗೆ ಮೇಲನ್ನುಂಟುಮಾಡಿ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.6ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.7ನಿಮ್ಮ ದೇವರಾದ ಯೆಹೋವನು ಆ ಶಾಪಗಳನ್ನೆಲ್ಲಾ, ನಿಮ್ಮನ್ನು ದ್ವೇಷಿಸಿ ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.8ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ.9ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನು ಉಂಟುಮಾಡುವನು.10ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು, ಆತನು ನಿಮ್ಮ ಪೂರ್ವಿಕರ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರುಗಿ ಸಂತೋಷಪಟ್ಟು ನಿಮಗೆ ಮೇಲನ್ನು ಉಂಟುಮಾಡುವನು.ಜೀವಮರಣಗಳ ಆಯ್ಕೆ
11ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶವು ನಿಮಗೆ ಗ್ರಹಿಸುವುದಕ್ಕೆ ಕಷ್ಟವಾದದ್ದು ಯಾವುದು ಇಲ್ಲ, ಅನುಸರಿಸುವುದಕ್ಕೆ ಅಸಾಧ್ಯವಾದದ್ದೂ ಅಲ್ಲ.12ಇದು ಮೇಲಣ ಲೋಕದಲ್ಲಿರುವ ಮಾತಲ್ಲ. <<ನಮಗೋಸ್ಕರ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೇಳಿ ಕೈಕೊಂಡೇವು>> ಅಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ.13ಮತ್ತು <<ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು>> ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.14ಈ ವಾಕ್ಯವು ನಿಮ್ಮ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಮತ್ತು ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವುದಕ್ಕೆ ಅವಕಾಶವುಂಟಷ್ಟೆ.ಶುಭವನ್ನೇ ಆರಿಸಿಕೊಳ್ಳಬೇಕೆಂದು ಮೋಶೆ ಬೋಧಿಸಿದ್ದು
15<<ನೋಡಿರಿ, ಈಗ ನಾನು ಜೀವ ಮತ್ತು ಶುಭಗಳನ್ನೂ ಹಾಗೂ ಮರಣ ಮತ್ತು ಅಶುಭಗಳನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.16ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.17ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,18ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.19ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.20ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ>> ಎಂದು ಹೇಳಿದನು.
31ಮೋಶೆಯ ಉತ್ತರಾಧಿಕಾರಿ ಯೆಹೋಶುವನು
1ಮೋಶೆ ಹೋಗಿ ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ತಿಳಿಸಿದನು.2ಅವನು ಅವರಿಗೆ, <<ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, <ನೀನು ಈ ಯೊರ್ದನ್ ನದಿಯನ್ನು ದಾಟಬಾರದು> ಎಂದು ಆಜ್ಞಾಪಿಸಿದ್ದಾನೆ.3ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.4ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಮತ್ತು ಓಗರನ್ನು ನಾಶಮಾಡಿ, ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು.5ಯೆಹೋವನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.6ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ>> ಎಂದು ಹೇಳಿದನು.7ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, <<ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;8ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು>> ಎಂದು ಹೇಳಿದನು.ಧರ್ಮಶಾಸ್ತ್ರವನ್ನು ಸಾವರ್ಜನಿಕವಾಗಿ ಓದಬೇಕೆಂಬ ನಿಯಮ
9ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.10ಆತನು ಅವರಿಗೆ, <<ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ ಪರ್ಣಶಾಲೆಗಳ ಜಾತ್ರೆಯಲ್ಲಿ11ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲರೆಲ್ಲರು ಆತನ ಸನ್ನಿಧಿಗೆ ಕೂಡಿಬಂದಾಗ ನೀವು ಅವರೆಲ್ಲರಿಗೆ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.12ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಮತ್ತು ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.13ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವುದಕ್ಕೆ ಕಲಿತುಕೊಳ್ಳುವರು>> ಎಂದು ಹೇಳಿದನು.ಯೆಹೋವನು ಯೆಹೋಶುವನನ್ನು ನೇಮಿಸಿದ್ದು
14ಯೆಹೋವನು ಮೋಶೆಗೆ, <<ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು>> ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.15ಅಲ್ಲಿ ಯೆಹೋವನು ಮೇಘಸ್ತಂಭದಲ್ಲಿ ಕಾಣಿಸಿದನು; ಆ ಮೇಘಸ್ತಂಭವು ಗುಡಾರದ ಬಾಗಿಲಿನ ಬಳಿಯಲ್ಲಿ ನಿಂತಿತು.ಇಸ್ರಾಯೇಲರನ್ನು ಕುರಿತು ಮೋಶೆ ರಚಿಸಬೇಕಾದ ಸಾಕ್ಷ್ಯಗೀತೆ
16ಯೆಹೋವನು ಮೋಶೆಗೆ, <<ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.17ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, <ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ> ಅಂದುಕೊಳ್ಳುವರು.18ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.19<<ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲರಿಗೆ ವಿರುದ್ಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠಮಾಡಿಸು.20ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.21ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು>> ಎಂದು ಹೇಳಿದನು.22ಆದಕಾರಣ ಮೋಶೆ ಆ ದಿನದಲ್ಲೇ ಈ ಪದ್ಯವನ್ನು ಬರೆದು ಇಸ್ರಾಯೇಲರಿಗೆ ಕಲಿಸಿದನು.23ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, <<ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು>> ಎಂದು ಆಜ್ಞಾಪಿಸಿದನು.ಅವಿಧೇಯತೆಯನ್ನು ಮುಂತಿಳಿಸಿದ್ದು
24ಮೋಶೆ ಈ ಧರ್ಮಶಾಸ್ತ್ರವನ್ನು ಗ್ರಂಥರೂಪವಾಗಿ ಬರೆದು ಪೂರೈಸಿದಾಗ,25ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ,26<<ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.27ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.28ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು.29ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ>> ಎಂದು ಹೇಳಿದನು.ಮೋಶೆಯ ಗೀತೆ
30ಆಗ ಮೋಶೆ ಇಸ್ರಾಯೇಲರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು.
321ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು.ಭೂಮಂಡಲವೇ, ನಾನು ಹೇಳುವುದನ್ನು ಕೇಳು.
2ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು;ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.
3ನಾನು ಯೆಹೋವನ ನಾಮಮಹತ್ವವನ್ನು ಪ್ರಕಟಿಸುವೆನು; ನಮ್ಮ ದೇವರನ್ನು ಮಹಾಮಹಿಮೆಯುಳ್ಳವನೆಂದು ಕೊಂಡಾಡುವೆನು.
4ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ;ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.
5ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.
6ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ?ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ.
7ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಆಲೋಚಿಸಿರಿ.ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು.
8ಹೇಗೆಂದರೆ, <<ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.
9ಇಸ್ರಾಯೇಲರು ಮಾತ್ರ ಯೆಹೋವನ ಸ್ವಂತ ಜನರಾದರು. ಯಾಕೋಬನ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದರು.
10ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು.
ಪ್ರೀತಿಯಿಂದ ಪರಾಂಬರಿಸಿದ ಹಾಗೂ ಕಣ್ಣುಗುಡ್ಡೆಯಂತೆ ಕಾಪಾಡಿದನು.
11ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ,ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು.
12ಯಾವ ಅನ್ಯದೇವರೂ ಇಲ್ಲ ಯೆಹೋವನೊಬ್ಬನೇ ಅವರನ್ನು ನಡಿಸಿಕೊಂಡು ಬಂದನು. 13ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ,
ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು.
14ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು,ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ;
ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.>>
15ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ,ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.
16ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು;ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.
17ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದೆ ಇರುವ
ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು.
18ಇಸ್ರಾಯೇಲರೇ, ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ಸ್ಮರಿಸಲಿಲ್ಲ;ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ.
19ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು;ತನ್ನ ಕುಮಾರ ಕುಮಾರ್ತೆಯರ ವಿಷಯದಲ್ಲಿ ವ್ಯಥೆಪಟ್ಟನು.
20ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು,<<ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು.
ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.
21ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು.ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ
ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.
22ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.
23ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು;ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರುದ್ಧವಾಗಿ ಪ್ರಯೋಗಿಸುವೆನು.
24ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು;ಅದಲ್ಲದೆ ನಾನು ದುಷ್ಟ ಮೃಗಗಳನ್ನೂ ಮತ್ತು ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.
25ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು.ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು
ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.
26ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು,ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.
27ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು,<ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು> ಎಂದು ನಾನು ಹಿಂದೆಗೆದೆನು>> ಎಂಬುದೇ.
28ಅವರು ವಿವೇಚನೆಯಿಲ್ಲದ ಜನರು; ಅವರಿಗೆ ಸ್ವಲ್ಪವಾದರೂ ವಿವೇಕವಿಲ್ಲ.
29ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು! 30ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು?
ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?
31ನಮ್ಮ ಆಶ್ರಯದುರ್ಗ ಅವರ ಆಶ್ರಯದುರ್ಗದಂತಲ್ಲಾ, ನಮ್ಮ ಅಶ್ರಯದಾತನಿಗೆ ಯಾರು ಸಮಾನರಲ್ಲವೆಂದು ನಮ್ಮ ಶತ್ರುಗಳೇ ಒಪ್ಪಿಕೊಳ್ಳುತ್ತಾರೆ. 32ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಂತಿದ್ದಾರೆ;ಮತ್ತು ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ.
ಅದರ ದ್ರಾಕ್ಷಿಹಣ್ಣು ವಿಷದ ದ್ರಾಕ್ಷಿಹಣ್ಣು;
ಅದರ ಗೊಂಚಲು ಕಹಿ.
33ಅದರ ದ್ರಾಕ್ಷಾರಸವು ಸರ್ಪದಂತೆಯೂ ಮತ್ತು ಕ್ರೂರ ವಿಷಸರ್ಪದಂತೆ ಮರಣಕರವಾದದ್ದು.
34ಇದನ್ನೆಲ್ಲಾ ನಾನು ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ ಅಲ್ಲವೇ? 35ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ;ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು;
ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.
36ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು.ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ
ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.
37ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ,<<ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು?
ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ?
38ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಮತ್ತು ಅವರುಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ?
ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.
39ನಾನೇ, ನಾನೊಬ್ಬನೇ ದೇವರಾಗಿರಲಾಗಿನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ.
ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ;
ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.
40ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲಜೀವಿಸುವವನೆಂಬುದು ಎಷ್ಟು ನಿಶ್ಚಯ ಎಂದು ಖಂಡಿತವಾಗಿ ಪ್ರಮಾಣಮಾಡುವೆನು,
41<ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ,ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು,
ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;
42ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು;ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ
ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚೆಂಡಾಡುವುದು> ಎಂಬುದೇ.
43ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ.ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ;
ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.
44ಮೋಶೆ ಮತ್ತು ನೂನನ ಮಗನಾದ ಯೆಹೋಶುವನೂ ಈ ಪದ್ಯದ ಮಾತುಗಳನ್ನೆಲ್ಲಾ ಜನರಿಗೆ ಕೇಳಿಸುವಂತೆ ಹೇಳಿದರು.>>ಮೋಶೆಯ ಅಂತಿಮ ಬೋಧನೆ
45ಮೋಶೆ ಈ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ಹೇಳಿ ಮುಗಿಸಿದ ನಂತರ,46ಅವರಿಗೆ, <<ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.47ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ>> ಎಂದು ಹೇಳಿದನು.ಮೋಶೆಗೆ ಯೆಹೋವನ ಆಜ್ಞೆ
48ಆದೇ ದಿನ ಯೆಹೋವನು ಮೋಶೆಗೆ,49<<ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ ಮೋವಾಬ್ಯರ ದೇಶದಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ, ನಾನು ಇಸ್ರಾಯೇಲರಿಗೆ ಸ್ವದೇಶವಾಗುವುದಕ್ಕೆ ಕೊಡುವ ಕಾನಾನ್ ದೇಶವನ್ನು ನೋಡು.50ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೇಬ್ ಎಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಿಕರಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪೂರ್ವಿಕರಲ್ಲಿ ಸೇರಬೇಕು.51ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.52ನಾನು ಇಸ್ರಾಯೇಲರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು>> ಎಂದು ಆಜ್ಞಾಪಿಸಿದನು.
33ಮೋಶೆಯ ಆಶೀರ್ವಚನಗಳು
1ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:2<<ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.3<<ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.4ಮೋಶೆಯಾದ, ನಾನು ಯಾಕೋಬನ ಸಂತತಿಯವರಾದ ನಿಮಗೆ ಧರ್ಮಶಾಸ್ತ್ರವನ್ನು ಸ್ವತ್ತಾಗಿ ಕೊಟ್ಟಿದ್ದೇನೆ.5ಇಸ್ರಾಯೇಲರ ಕುಲಗಳು ಅವರ ಅಧಿಪತಿಗಳೊಡನೆ ಒಟ್ಟಾಗಿ ಸೇರಿಬಂದಾಗ ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.6<<ರೂಬೇನ್ ಕುಲದ ವಿಷಯದಲ್ಲಿ, <ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಜನರುಳ್ಳದ್ದಾಗಿರುವುದು> ಎಂದು ಹೇಳಿದನು.7<<ಯೆಹೂದ ಕುಲದ ವಿಷಯದಲ್ಲಿ, <ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ರಕ್ಷಿಸು> >> ಎಂದು ಹೇಳಿದನು.8ಲೇವಿ ಕುಲದ ವಿಷಯದಲ್ಲಿ, <<ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.9ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು <ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ> ಹೇಳಿಬಿಟ್ಟರಲ್ಲಾ.10ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.11ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು>> ಎಂದು ಹೇಳಿದನು.12ಬೆನ್ಯಾಮೀನ್ ಕುಲದವರ ವಿಷಯದಲ್ಲಿ, <<ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು>> ಎಂದು ಹೇಳಿದನು.13ಯೋಸೇಫ್ ಕುಲಗಳ ವಿಷಯದಲ್ಲಿ, <<ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,14ವರ್ಷ ವರ್ಷಕ್ಕೂ, ತಿಂಗಳು ತಿಂಗಳಿಗೂ ಆಗುವ ಬೆಳೆ,15ಅನಾದಿಯಾದ ಪರ್ವತಗಳ ಉತ್ಪನ್ನ, ಶಾಶ್ವತವಾದ ಬೆಟ್ಟಗಳಿಂದುಂಟಾಗುವ ಮೇಲು,16ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.17ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ>> ಎಂದು ಹೇಳಿದನು.18ಜೆಬುಲೂನ್ಯರ ಮತ್ತು ಇಸ್ಸಾಕಾರ್ಯರ ವಿಷಯದಲ್ಲಿ, <<ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರಿ; ಇಸ್ಸಾಕಾರ್ಯರೇ, ನಿಮ್ಮ ಪಾಳೆಯಗಳಲ್ಲಿ ಆನಂದವಾಗಿರಿ.19ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ, ಭೂಮಿಯೊಳಗೆ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರೆಯಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು>> ಎಂದು ಹೇಳಿದನು.20ಗಾದ್ ಕುಲದವರ ವಿಷಯದಲ್ಲಿ, <<ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ.21ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ ಯೋಗ್ಯವಾದ ಸ್ವತ್ತು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು>> ಎಂದು ಹೇಳಿದನು.22ದಾನ್ ಕುಲದ ವಿಷಯದಲ್ಲಿ, <<ದಾನ್ ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ>> ಎಂದು ಹೇಳಿದನು.23ನಫ್ತಾಲಿ ಕುಲದ ವಿಷಯದಲ್ಲಿ, <<ನಫ್ತಾಲಿ ಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತನಾದೆ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. (ಕಿನ್ನೆರೆತ್) ಸಮುದ್ರವೂ ದಕ್ಷಿಣಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ>> ಎಂದು ಹೇಳಿದನು.24ಆಶೇರ್ ಕುಲದ ವಿಷಯದಲ್ಲಿ, <<ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ.25ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ>> ಎಂದು ಹೇಳಿದನು.26ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.27ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು <<ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ>> ಎಂದು ಆಜ್ಞಾಪಿಸಿದನು;28ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.29<<ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ>> ಎಂಬುದೇ.
34ಮೋಶೆಯ ಮರಣ
1ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ,2ನಫ್ತಾಲಿ ಪ್ರದೇಶ, ಎಫ್ರಾಯೀಮ್ ಮತ್ತು ಮನಸ್ಸೆ ಕುಲಗಳವರ ಸೀಮೆ, ಪಶ್ಚಿಮಸಮುದ್ರದವರೆಗೂ ಯೆಹೂದ ಸೀಮೆ,3ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ,4<<ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು>> ಎಂದು ಹೇಳಿದನು.5ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.6ಮೋವಾಬ್ಯರ ದೇಶದಲ್ಲಿ ಬೇತ್‍ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು.7ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.8ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.9ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.10ಮೋಶೆಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ, ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು.11ಆತನು ಐಗುಪ್ತದೇಶದಲ್ಲಿ ಫರೋಹನ ಮುಂದೆಯೂ, ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ನಡಿಸುವುದಕ್ಕೆ ಯೆಹೋವನು ಅವನನ್ನು ಕಳುಹಿಸಿದನು.12ಅವನು ಇಸ್ರಾಯೇಲರ ಕಣ್ಣ ಮುಂದೆ ವಿಶೇಷವಾದ ಭುಜಪರಾಕ್ರಮವನ್ನೂ ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನೂ ನಡೆಸಿದನು.
ಯೆಹೋಶುವನು
1ಹೊಳೆದಾಟುವುದಕ್ಕೆ ಸಿದ್ಧರಾಗಬೇಕೆಂಬ ಅಪ್ಪಣೆ
1ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ2<<ನನ್ನ ಸೇವಕನಾದ ಮೋಶೆ ಸತ್ತನು; ನೀನು ಈಗ ಹೊರಟು ಸಮಸ್ತ ಇಸ್ರಾಯೇಲ್ ಜನರೊಂದಿಗೆ ಈ ಯೊರ್ದನ್ ನದಿಯನ್ನು ದಾಟಿ, ನಾನು ಅವರಿಗೆ ಕೊಡುವ ದೇಶಕ್ಕೆ ಹೋಗು.3ನಾನು ಮೋಶೆಗೆ ವಾಗ್ದಾನ ಮಾಡಿದಂತೆ ನೀವು ಕಾಲಿಡುವ ಸ್ಥಳಗಳನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ.4ಅರಣ್ಯಗಳು ಹಾಗೂ ಈ ಲೆಬನೋನ್ ಪರ್ವತದಿಂದ ಮೊದಲುಗೊಂಡು ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು; ನಿಮ್ಮ ಸೀಮೆಯು ಪಶ್ಚಿಮದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.5ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.6ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.7ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.8ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.9ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು>> ಎಂದು ಹೇಳಿದನು.ಯೆಹೋಶುವನು ಜನರಿಗೆ ಕೊಟ್ಟ ಆದೇಶ
10ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ11<<ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ <ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ> ಎಂದು ತಿಳಿಸಿರಿ>> ಅಂದನು.12ಬಳಿಕ ಯೆಹೋಶುವನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಹೇಳಿದ್ದೇನಂದರೆ13<<ಯೆಹೋವನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟು ವಿಶ್ರಾಂತಿ ನೀಡಿದ್ದಾನೆ.14ನಿಮ್ಮ ಹೆಂಡತಿ ಮಕ್ಕಳು, ನಿಮ್ಮ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ವಾಸವಾಗಿರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.15ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿ ಹೊಂದಿದ ನಂತರ ನಿಮ್ಮ ಸ್ವಂತ ದೇಶಕ್ಕೆ ಹಿಂತಿರುಗಿ, ಮೋಶೆಯು ನಿಮಗೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವತ್ತಾಗಿ ಕೊಟ್ಟ ದೇಶವನ್ನು ಸ್ವಾಧೀನಪಡಿಸಿಕೊಂಡು ಅದನ್ನು ಅನುಭವಿಸುವಿರಿ>> ಎಂದನು.16ಆಗ ಅವರು ಯೆಹೋಶುವನಿಗೆ ಉತ್ತರವಾಗಿ <<ನೀನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ; ಎಲ್ಲಿಗೆ ಕಳುಹಿಸಿದರೂ ಹೋಗುತ್ತೇವೆ.17ನಾವು ಮೋಶೆಯ ಎಲ್ಲಾ ಮಾತುಗಳಿಗೆ ವಿಧೇಯರಾದ ಹಾಗೆ ನಿನ್ನ ಮಾತುಗಳಿಗೂ ವಿಧೇಯರಾಗುವೆವು. ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.18ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು>> ಎಂದು ಹೇಳಿದರು.
2ಗೂಢಚಾರರು ಮತ್ತು ರಾಹಾಬಳು
1ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ <<ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ>> ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.2ಜನರು ಯೆರಿಕೋವಿನ ಅರಸನಿಗೆ <<ಇಗೋ, ಈ ರಾತ್ರಿ ಇಸ್ರಾಯೇಲ್ಯರ ಕಡೆಯವರು ನಮ್ಮ ದೇಶವನ್ನು ಸಂಚರಿಸಿ ಹೊಂಚುಹಾಕುವುದಕ್ಕೆ ಬಂದಿದ್ದಾರೆ>> ಎಂದು ತಿಳಿಸಿದರು.3ಆಗ ಯೆರಿಕೋವಿನ ಅರಸನು ರಾಹಾಬಳಿಗೆ <<ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡಿ ಹೊಂಚುಹಾಕುವುದಕ್ಕೆ ಬಂದವರು>> ಎಂದು ಹೇಳಿ ಕಳುಹಿಸಿದನು.4ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು ಕೇಳಲು ಬಂದವರಿಗೆ, <<ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬುದು ನನಗೆ ತಿಳಿಯಲಿಲ್ಲ.5ಊರಬಾಗಿಲನ್ನು ಮುಚ್ಚುವ ಹೊತ್ತಿನಲ್ಲಿ ಕತ್ತಲಲ್ಲೇ ಹೊರಟುಹೋದರು. ಎಲ್ಲಿಗೆ ಹೋದರೆಂಬುದು ಗೊತ್ತಿಲ್ಲ. ಬೇಗನೆ ಅವರನ್ನು ಬೆನ್ನಟ್ಟಿರಿ; ನಿಮಗೆ ಸಿಕ್ಕಾರು>> ಎಂದು ಹೇಳಿದಳು.6ಆದರೆ ಅವಳು ಆ ಮನುಷ್ಯರನ್ನು ಮಾಳಿಗೆಯ ಮೇಲೆ ಹತ್ತಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನ ಹೊರೆಗಳ ಮಧ್ಯದಲ್ಲಿ ಬಚ್ಚಿಟ್ಟಿದ್ದಳು.7ಅರಸನ ಆಳುಗಳು ಯೊರ್ದನಿನ ದಾರಿ ಹಿಡಿದು ಹೋಗಿ ಹೊಳೆದಾಟುವ ಸ್ಥಳದವರೆಗೂ ಹುಡುಕಿದರು. ಅವರನ್ನು ಹಿಂದಟ್ಟುವವರು ಹೋದ ಕೂಡಲೇ ಹೆಬ್ಬಾಗಿಲನ್ನು ಮುಚ್ಚಿದರು.8ಆ ಗೂಢಚಾರರು ಮಲಗಿಕೊಳ್ಳುವ ಮೊದಲೇ ಆಕೆಯು ಮಾಳಿಗೆ ಹತ್ತಿ ಅವರ ಬಳಿಗೆ ಬಂದು ಹೇಳಿದ್ದೇನೆಂದರೆ9<<ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.10ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟಿದ್ದನ್ನೂ, ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಾಶಮಾಡಿದ್ದನ್ನೂ ಕೇಳಿ11ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.12ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆತೋರಿಸಿದಂತೆ ನೀವೂ ಸಹ ನನ್ನ ತಂದೆಯ ಮನೆಯವರಿಗೆ ದಯೆತೋರಿಸಬೇಕೆಂದು ಯೆಹೋವನ ಮೇಲೆ ವಾಗ್ದಾನ ನೀಡಬೇಕು.13ನನ್ನ ತಂದೆ ತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗಿರುವುದೆಲ್ಲವನ್ನು ನಾಶಮಾಡದೆ ಉಳಿಸುವುದಾಗಿ ಯೆಹೋವನ ಹೆಸರಿನಲ್ಲಿ ವಾಗ್ದಾನ ಮಾಡಬೇಕು ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ>> ಎಂದಳು.14ಆಗ ಆ ಗೂಢಚಾರರು <<ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು>> ಅಂದರು.15ಅವಳ ಮನೆಯು ಊರಗೋಡೆಯ ಮೇಲಿದ್ದುದರಿಂದ ಅವರನ್ನು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ16<<ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿ ಹೋಗಿ ಅಲ್ಲಿ ಮೂರು ದಿನ ಅಡಗಿಕೊಂಡಿದ್ದು, ತರುವಾಯ ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ>> ಎಂದಳು.17ಆಗ ಅವರಲ್ಲಿ ಒಬ್ಬನು ಆಕೆಗೆ <<ನಾವು ಹೇಳುವ ಮಾತಿನಂತೆ ನೀನು ನಡೆಯದಿದ್ದರೆ, ನೀನು ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ;18ನಾವು ಈ ದೇಶದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ ಈ ಕೆಂಪು ದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನೂ ಅಣ್ಣತಮ್ಮಂದಿರನ್ನೂ ಎಲ್ಲಾ ಬಂಧುಬಳಗದವರನ್ನೂ ನಿನ್ನ ಮನೆಯಲ್ಲಿ ಸೇರಿಸಿಕೊಂಡಿರಬೇಕು.19ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು; ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈ ಮಾಡಿದ್ದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲೆ ಇರುವುದು.20ಇದಲ್ಲದೆ ನೀನು ನಮ್ಮ ವಿಷಯವನ್ನು ಬಹಿರಂಗಪಡಿಸಿದರೆ ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ>> ಎಂದು ಹೇಳಿದರು.21ಅದಕ್ಕೆ ಅವಳು <<ನಿಮ್ಮ ಮಾತಿನಂತೆಯೇ ಆಗಲಿ>> ಎಂದು ಹೇಳಿ ಅವರನ್ನು ಕಳುಹಿಸಿದಳು; ಅವರು ಹೊರಟು ಹೋದ ಮೇಲೆ ಆ ಕೆಂಪು ದಾರವನ್ನು ಕಿಟಿಕಿಗೆ ಕಟ್ಟಿದಳು.22ಗೂಢಚಾರರು ಹೊರಟು ಹೋಗಿ ಆ ಬೆಟ್ಟವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿನಗಳ ಕಾಲ ಅಲ್ಲೇ ತಂಗಿದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು.23ಆಗ ಅವರಿಬ್ಬರೂ ಬೆಟ್ಟದಿಂದಿಳಿದು, ಹೊಳೆದಾಟಿ, ನೂನನ ಮಗನಾದ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದರು.24ಇದಲ್ಲದೆ ಅವರು <<ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ>> ಎಂದು ತಿಳಿಸಿದರು.
3ಯೊರ್ದನ್ ನದಿಯನ್ನು ದಾಟಿದ್ದು
1ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.2ಮೂರು ದಿನಗಳಾದ ಮೇಲೆ ಜನಾಧಿಪತಿಗಳು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ3<<ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.4ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗಬೇಕಾದ ಮಾರ್ಗವು ನಿಮಗೆ ಗೊತ್ತಾಗುವುದು; ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿರುವುದಿಲ್ಲ>> ಅಂದರು.5ಇದಲ್ಲದೆ ಯೆಹೋಶುವನು ಜನರಿಗೆ <<ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು>> ಎಂದು ಹೇಳಿದನು.6ನಂತರ ಯೆಹೋಶುವನು ಯಾಜಕರಿಗೆ <<ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ>> ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು.7ಆಗ ಯೆಹೋವನು ಯೆಹೋಶುವನಿಗೆ <<ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.8ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು>> ಎಂದು ಹೇಳಿದನು.9ಆಗ ಯೆಹೋಶುವನು ಇಸ್ರಾಯೇಲ್ಯರಿಗೆ <<ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ>> ಎಂದು ಹೇಳಿ,10<<ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.11ಹೇಗೆಂದರೆ ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಯೊರ್ದನಿನಲ್ಲಿ ಇಳಿಯವುದು.12ಆಗ ನೀನು ಇಸ್ರಾಯೇಲರ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು.13ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು>> ಎಂದು ತಿಳಿಸಿದನು.14ಜನರು ಯೊರ್ದನ್ ನದಿಯನ್ನು ದಾಟುವುದಕ್ಕೋಸ್ಕರ ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.15ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು.16ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.17ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.
4ಗಿಲ್ಗಾಲಿನಲ್ಲಿ ಹನ್ನೆರಡು ಸ್ಮಾರಕ ಕಲ್ಲುಗಳನ್ನು ನಿಲ್ಲಿಸಿದ್ದು
1ಜನರೆಲ್ಲರು ಯೊರ್ದನಿನ ಆಚೆಗೆ ದಾಟಿದ ಮೇಲೆ ಯೆಹೋವನು ಯೆಹೋಶುವನಿಗೆ2<<ನೀನು ಜನರೊಳಗಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಂಡು3ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿರಿ>> ಎಂದು ಆಜ್ಞಾಪಿಸು ಎಂದನು.4ಆಗ ಯೆಹೋಶುವನು ತಾನು ಇಸ್ರಾಯೇಲ್ಯರೊಳಗಿಂದ ಕುಲಕ್ಕೆ ಒಬ್ಬನಂತೆ ಆರಿಸಿಕೊಂಡ ಹನ್ನೆರಡು ಮಂದಿಯನ್ನು ಕರೆದು ಅವರಿಗೆ5<<ನೀವು ನಿಮ್ಮ ದೇವರಾದ ಯೆಹೋವನ ಮಂಜೂಷದ ಮುಂದಾಗಿ ಯೊರ್ದನಿನ ಮಧ್ಯಕ್ಕೆ ಹೋಗಿ ಇಸ್ರಾಯೇಲರ ಕುಲಗಳ ಸಂಖ್ಯೆಗೆ ಸರಿಯಾಗುವಂತೆ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.6ಅವು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು <ಈ ಕಲ್ಲುಗಳು ಏನು ಸೂಚಿಸುತ್ತವೆ?> ಎಂದು ನಿಮ್ಮನ್ನು ಕೇಳುವಾಗ7ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು>> ಅಂದನು.8ಇಸ್ರಾಯೇಲ್ಯರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಯೆಹೋವನು ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಾಯೇಲ್ಯರ ಕುಲಸಂಖ್ಯೆಗೆ ಅನುಸಾರವಾಗಿ ಯೊರ್ದನಿನ ಮಧ್ಯದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ತಾವು ಇಳುಕೊಳ್ಳುವ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು.9ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲಿಯೇ ಇವೆ.10ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು.11ಜನರು ಬೇಗನೆ ಹೊಳೆ ದಾಟಿದರು. ಅವರೆಲ್ಲರು ಆಚೆ ದಡ ಸೇರಿದ ಮೇಲೆ ಯಾಜಕರು ಯೆಹೋವನ ಮಂಜೂಷ ಸಹಿತವಾಗಿ ಹೊಳೆ ದಾಟಿ ಜನರ ಎದುರಿನಲ್ಲಿ ಹೋದರು.12ರೂಬೇನ್ಯರೂ, ಗಾದ್ಯರೂ, ಮನಸ್ಸೆ ಕುಲದ ಅರ್ಧ ಗೋತ್ರದವರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ದರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.13ಸುಮಾರು ನಲವತ್ತು ಸಾವಿರ ಭಟರು ಯುದ್ಧಮಾಡುವುದಕ್ಕಾಗಿ ಯೆಹೋವನ ಸಮ್ಮುಖದಲ್ಲಿ ಯೆರಿಕೋವಿನ ಬೈಲಿಗೆ ಬಂದರು:14ಆ ದಿನದಲ್ಲಿ ಯೆಹೋವನು ಯೆಹೋಶುವನನ್ನು ಎಲ್ಲಾ ಇಸ್ರಾಯೇಲ್ಯರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಹೇಗೆ ನಡೆದುಕೊಂಡರೋ ಹಾಗೆಯೇ ಯೆಹೋಶುವನು ಭಯ ಮತ್ತು ಗೌರವದಿಂದ ನಡೆದುಕೊಂಡರು.15-16ಯೆಹೋವನು ಯೆಹೋಶುವನ ಸಂಗಡ ಮಾತನಾಡಿ <<ಆಜ್ಞಾಶಾಸನಗಳ ಮಂಜೂಷವನ್ನು ಹೊತ್ತ ಯಾಜಕರಿಗೆ ಯೊರ್ದನಿನ ಹೊಳೆಯಿಂದ ಮೇಲೆ ಬರಬೇಕೆಂದು ಆಜ್ಞಾಪಿಸು>> ಎಂದನು.17ಆಗ ಯೆಹೋಶುವನು ಆ ಯಾಜಕರಿಗೆ ಯೊರ್ದನ್ ನದಿಯಿಂದ ಹೊರಕ್ಕೆ ಬರಬೇಕೆಂದು ಆಜ್ಞಾಪಿಸಿದನು.18ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೆಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೇ ನೀರು ಮೊದಲಿನಂತೆ ಬಂದು, ಯೊರ್ದನ್ ನದಿಯು ದಡಮೀರಿ ಹರಿಯಿತು.19ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಪೂರ್ವ ಗಡಿಯಲ್ಲಿರುವ ಗಿಲ್ಗಾಲಿನಲ್ಲಿ ಬಂದು ತಂಗಿದರು.20ಯೆಹೋಶುವನು ಇಸ್ರಾಯೇಲರು ಯೊರ್ದನಿನಿಂದ ತೆಗೆದುಕೊಂಡು ಬಂದಿದ್ದ ಹನ್ನೆರಡು ಕಲ್ಲುಗಳನ್ನು ಗಿಲ್ಗಾಲಿನಲ್ಲೇ ನಿಲ್ಲಿಸಿದನು.21ಇಸ್ರಾಯೇಲ್ಯರಿಗೆ, <<ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ಈ ಕಲ್ಲುಗಳನ್ನು ಏಕೆ ಹೀಗೆ ನಿಲ್ಲಿಸಿದ್ದಾರೆಂದು ನಿಮ್ಮನ್ನು ಕೇಳಿದರೆ ನೀವು ಅವರಿಗೆ22<ಇಸ್ರಾಯೇಲ್ಯರು ಒಣನೆಲವಾಗಿದ್ದ ಈ ಯೊರ್ದನನ್ನು ದಾಟಿ ಬಂದ್ದದರ ಗುರುತು> ಎಂದು ಹೇಳಿರಿ.23ನಿಮ್ಮ ದೇವರಾದ ಯೆಹೋವನು ನಮ್ಮ ಕಣ್ಣು ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಣು ಮುಂದೆಯೇ ಈ ಯೊರ್ದನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾನೆ.24ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವ ಹಾಗೆಯೂ ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವವರಾಗಿರುವರು>> ಎಂದನು.
5ಗಿಲ್ಗಾಲಿನಲ್ಲಿ ಇಸ್ರಾಯೇಲ್ಯರಿಗೆ ಮಾಡಲಾದ ಸುನ್ನತಿ ಸಂಸ್ಕಾರ ಹಾಗೂ ಪಸ್ಕಹಬ್ಬ ಆಚರಿಸಿದ್ದು
1ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.2ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ <<ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಪುನಃ ಇಸ್ರಾಯೇಲ್ಯರಿಗೆ ಸುನ್ನತಿ ಮಾಡು>> ಎಂದು ಹೇಳಲು3ಯೆಹೋಶುವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿ ಮಾಡಿದನು.4ಯೆಹೋಶುವನು ಸುನ್ನತಿ ಮಾಡಿದ್ದಕ್ಕೆ ಕಾರಣವೇನಂದರೆ ಐಗುಪ್ತದಿಂದ ಹೊರಟು ಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು ಬಂದ ನಂತರ ಅರಣ್ಯದಲ್ಲಿ ಸತ್ತು ಹೋದರು.5ಅಲ್ಲಿಂದ ಬಂದಿದ್ದ ಗಂಡಸರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟ ನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.6ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.7ಆದುದರಿಂದ ಅವರ ಪೂರ್ವಿಕರಿಗೆ ಪ್ರತಿಯಾಗಿ ಹುಟ್ಟಿದ ಗಂಡು ಮಕ್ಕಳಿಗೆ ಯೆಹೋಶುವನು ಸುನ್ನತಿ ಮಾಡಿದನು. ದಾರಿಯಲ್ಲಿ ಯಾರೂ ಅವರಿಗೆ ಸುನ್ನತಿಮಾಡಿರಲಿಲ್ಲ. ಆದುದರಿಂದ ಅವರು ಸುನ್ನತಿಯಿಲ್ಲದವರಾಗಿದ್ದರು.8ಸುನ್ನತಿಯಾದ ಮೇಲೆ ಆ ಜನರು ವಾಸಿಯಾಗುವ ತನಕ ತಮ್ಮ ತಮ್ಮ ಪಾಳೆಯಗಳಲ್ಲಿಯೇ ಇದ್ದರು.9ಯೆಹೋವನು ಯೆಹೋಶುವನಿಗೆ, <<ನಾನು ಐಗುಪ್ತ್ಯರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿ ಬಿಟ್ಟಿದ್ದೇನೆ>> ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿರುತ್ತದೆ.10ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕಹಬ್ಬವನ್ನು ಆಚರಿಸಿದರು.11ಮರುದಿನದಿಂದ ಆ ದೇಶದ ಧಾನ್ಯವನ್ನು ಊಟಕ್ಕೆ ಉಪಯೋಗಿಸಲು ತೊಡಗಿದರು. ಹೇಗೆಂದರೆ ಅದೇ ಪಸ್ಕಹಬ್ಬದ ದಿನದಲ್ಲಿ ಅವರು ಹುಳಿಯಿಲ್ಲದ ರೊಟ್ಟಿಗಳನ್ನೂ, ಸುಟ್ಟ ತೆನೆಗಳನ್ನೂ ತಿಂದರು.12ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರುಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರ್ಷವೆಲ್ಲ ಕಾನಾನ್ ದೇಶದ ಉತ್ಪನ್ನವನ್ನೇ ಅನುಭವಿಸಿದರು.ಯೆಹೋವನ ಸೇನಾಧಿಪತಿ ಯೆಹೋಶುವನಿಗೆ ಪ್ರತ್ಯಕ್ಷವಾದದ್ದು
13ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ <<ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?>> ಎಂದು ಕೇಳಲು14ಆ ಮನುಷ್ಯನು <<ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ>> ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ <<ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?>> ಅನ್ನಲು15ಯೆಹೋವನ ಸೇನಾಧಿಪತಿಯು <<ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು>> ಎಂದು ಹೇಳಿದನು. ಯೆಹೋಶುವನು ಹಾಗೆಯೇ ಮಾಡಿದನು.
6ಯೆರಿಕೋವಿನ ಪತನ
1ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.2ಆಗ ಯೆಹೋವನು ಯೆಹೋಶುವನಿಗೆ <<ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಹಾಗೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ.3ನಿನ್ನ ಭಟರೆಲ್ಲ ಆರು ದಿನಗಳ ವರೆಗೆ ದಿನಕ್ಕೆ ಒಂದು ಸಾರಿ ಪಟ್ಟಣವನ್ನು ಸುತ್ತಲಿ.4ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.5ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಗಟ್ಟಿಯಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವುದು; ಪ್ರತಿಯೊಬ್ಬನೂ ನೆಟ್ಟಗೆ ಒಳಗೆ ನುಗ್ಗಬಹುದು>> ಎಂದು ಹೇಳಿದನು.6ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, <<ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ>> ಎಂದನು.7ಮತ್ತು ಅವನು ಜನರಿಗೆ <<ನೀವು ಹೋಗಿ ಪಟ್ಟಣವನ್ನು ಸುತ್ತಿರಿ. ಯುದ್ಧಸನ್ನದ್ಧರೆಲ್ಲರೂ ಯೆಹೋವನ ಮಂಜೂಷದ ಮುಂದೆ ಹೋಗಲಿ>> ಎಂದು ಹೇಳಿದನು.8ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ, ಯೆಹೋವನ ಪ್ರಸನ್ನತೆಯಲ್ಲಿ ನಡೆದರು. ಯೆಹೋವನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು.9ಯುದ್ಧ ಸನ್ನದ್ಧರಾದವರು ಕೊಂಬುಗಳನ್ನು ಊದುತ್ತಿದ್ದ ಯಾಜಕರ ಮುಂದೆ ಇದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಯಾಜಕರು ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.10ಯೆಹೋಶುವನು ಜನರಿಗೆ <<ನೀವು ಈಗ ಆರ್ಭಟಿಸಬಾರದು; ನಿಮ್ಮ ಧ್ವನಿಯು ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತಾದರೂ ಹೊರಡದಿರಲಿ. ಆರ್ಭಟಿಸಿರೆಂದು ನಾನು ಹೇಳುವ ದಿನದಲ್ಲಿ ಮಾತ್ರ ಆರ್ಭಟಿಸಿರಿ>> ಎಂದು ಆಜ್ಞಾಪಿಸಿದನು.11ಅವರು ಯೆಹೋವನ ಮಂಜೂಷವನ್ನು ಒಂದು ಸಾರಿ ಪಟ್ಟಣವನ್ನು ಪ್ರದಕ್ಷಿಣೆ ಮಾಡಿದ ಮೇಲೆ ತಿರುಗಿ ಪಾಳೆಯಕ್ಕೆ ಬಂದು ರಾತ್ರಿ ಕಳೆದರು.12ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡು ಹೊರಟರು.13ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಯೆಹೋವನ ಮಂಜೂಷದ ಮುಂದೆ ನಡೆದರು. ಯುದ್ಧ ಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಯೆಹೋವನ ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.14ಹೀಗೆ ಎರಡನೆಯ ದಿನದಲ್ಲಿಯೂ ಪಟ್ಟಣವನ್ನು ಸುತ್ತಿ ಪಾಳೆಯಕ್ಕೆ ಹಿಂದಿರುಗಿದರು.15ಆರು ದಿನ ಈ ಪ್ರಕಾರ ಮಾಡಿದರು. ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ಪಟ್ಟಣವನ್ನು ಏಳು ಸಾರಿ ಸುತ್ತಿದರು. ಈ ದಿನದಲ್ಲಿ ಮಾತ್ರ ಅದನ್ನು ಏಳು ಸಾರಿ ಸುತ್ತಿದರು.16ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ, <<ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.17ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ.18ನೀವಾದರೋ ಯೆಹೋವನಿಗೆ ಅರ್ಪಿಸುವ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ, ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ನಾಶವಾದೀತು.19ಎಲ್ಲಾ ಬೆಳ್ಳಿ ಬಂಗಾರವೂ, ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನಿಗೆ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು>> ಎಂದನು.20ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು.21ಪಟ್ಟಣದಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ, ಹುಡುಗರನ್ನೂ, ಮುದುಕರನ್ನೂ, ದನ, ಕುರಿ ಕತ್ತೆಗಳನ್ನೂ ಸಂಪೂರ್ಣವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.22ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಗೂಢಚಾರರಿಗೆ <<ನೀವು ಆ ವೇಶ್ಯೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ>> ಎಂದು ಹೇಳಲು23ಆ ಯೌವನಸ್ಥರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಯನ್ನು, ಸಹೋದರರನ್ನು, ಅವಳಿಗಿರುವುದೆಲ್ಲವನ್ನೂ, ಅವಳ ಗೋತ್ರದ ಎಲ್ಲಾ ಜನರನ್ನೂ ತಂದು ಇಸ್ರಾಯೇಲ್ಯರ ಪಾಳೆಯದ ಹೊರಗೆ ಇಟ್ಟರು.24ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಆದರೆ ಬೆಳ್ಳಿಬಂಗಾರವನ್ನೂ, ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ, ಯೆಹೋವನ ಆಲಯದ ಭಂಡಾರಕ್ಕೆ ಒಪ್ಪಿಸಿದರು.25ವೇಶ್ಯೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೆ ಬಂದಿದ್ದ ಯೆಹೋಶುವನ ಗೂಢಚಾರರನ್ನು ಅಡಗಿಸಿಟ್ಟದ್ದರಿಂದ ಅವನು ಅವಳನ್ನೂ, ಅವಳ ತಂದೆಯ ಮನೆಯವರನ್ನೂ, ಅವಳಿಗಿರುವುದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ.26ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ<<ಈ ಯೆರಿಕೋ ಪಟ್ಟಣವನ್ನು ಕಟ್ಟುವುದಕ್ಕೆ ಕೈ ಹಾಕುವ ಮನುಷ್ಯನು
ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ.
ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರಿಯ ಮಗನನ್ನೂ
ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ>>
ಎಂದು ಹೇಳಿದನು.
27ಯೆಹೋವನು ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ದೇಶದಲ್ಲೆಲ್ಲಾ ಹಬ್ಬಿತು.
7ಆಕಾನನ ಪಾಪದ ದೆಸೆಯಿಂದ ಇಸ್ರಾಯೇಲ್ಯರಿಗುಂಟಾದ ಅಪಜಯವೂ ಅವನಿಗಾದ ಶಿಕ್ಷೆಯೂ
1ಯೆಹೂದ ಕುಲದವನೂ ಜೆರಹನ ಗೋತ್ರದವನೂ, ಜಬ್ದೀಯ ಕುಟುಂಬದವನೂ, ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದ್ದರಿಂದ ಇಸ್ರಾಯೇಲ್ಯರೆಲ್ಲರು ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.2ಯೆಹೋಶುವನು ಕೆಲವು ಜನರನ್ನು ಕರೆದು <<ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ <ಆಯಿ> ಎಂಬ ಪ್ರಾಂತ್ಯದಲ್ಲಿ ರಹಸ್ಯವಾಗಿ ಸಂಚರಿಸಿ ನೋಡಿರಿ>> ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ,3ಹಿಂದಿರುಗಿ ಬಂದು ಯೆಹೋಶುವನಿಗೆ <<ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವುದೇತಕೆ? ಅವರು ಕಡಿಮೆ ಜನರಿದ್ದಾರೆ>> ಎಂದು ಹೇಳಿದರು.4ಅದರಂತೆ ಸುಮಾರು ಮೂರು ಸಾವಿರ ಮಂದಿ ಯುದ್ಧಕ್ಕೆ ಹೋದರು. ಆದರೆ ಅವರು ಆಯಿ ಊರಿನವರ ಎದುರಿನಿಂದ ಓಡಿ ಹೋಗಬೇಕಾಯಿತು.5ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಗಳವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಾಯೇಲರ ಧೈರ್ಯ ಕುಂದಿಹೋಯಿತು.6ಆಗ ಯೆಹೋಶುವನೂ ಮತ್ತು ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಭೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲು ಬಿದ್ದರು.7ಯೆಹೋಶುವನು <<ಅಯ್ಯೋ, ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶ ಮಾಡಬೇಕೆಂದಿರುವಿಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು.8ಕರ್ತನೇ, ಇಸ್ರಾಯೇಲ್ಯರು ಶತ್ರುಗಳಿಗೆ ಬೆನ್ನು ತೋರಿಸಬೇಕಾಯಿತಲ್ಲಾ.9ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?>> ಎಂದನು.10ಆಗ ಯೆಹೋವನು ಯೆಹೋಶುವನಿಗೆ ಹೇಳಿದ್ದೇನೆಂದರೆ <<ಏಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇಕೆ?11ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಕೊಳ್ಳೆಯಲ್ಲಿ ಮೀಸಲಾದ ವಸ್ತುಗಳನ್ನು ಕದ್ದು ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾಗಿದ್ದಾರೆ.12ಆದುದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದವರನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.13ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ <ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ.14ನಾಳೆ ಬೆಳಿಗ್ಗೆ ನೀವು ಕುಲ ಕುಲವಾಗಿ ನನ್ನ ಬಳಿಗೆ ಬನ್ನಿರಿ. ಯೆಹೋವನು ಯಾವ ಕುಲವನ್ನು ಸೂಚಿಸುತ್ತಾನೋ ಆ ಕುಲವು ಗೋತ್ರ ಗೋತ್ರವಾಗಿ, ಯಾವ ಗೋತ್ರವನ್ನು ಸೂಚಿಸುತ್ತಾನೋ ಆ ಗೋತ್ರವು ಕುಟುಂಬ ಕುಟುಂಬವಾಗಿ ನನ್ನ ಬಳಿಗೆ ಬರಬೇಕು. ಯಾವ ಕುಟುಂಬನ್ನು ಸೂಚಿಸುತ್ತಾನೋ ಆ ಕುಟುಂಬದವರು ಒಬ್ಬೊಬ್ಬರಾಗಿ ನನ್ನ ಬಳಿಗೆ ಬರಬೇಕು.15ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿ ಸಹಿತವಾಗಿ ಸುಡಲ್ಪಡಬೇಕು> >> ಎಂದು ಹೇಳು ಎಂಬುದೇ.16ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲರ ಕುಲಗಳನ್ನು ಒಂದೊಂದಾಗಿ ಬರಮಾಡಲು ಯೆಹೂದ ಕುಲವು ಹಿಡಿಯಲ್ಪಟ್ಟಿತು.17ಅದರ ಗೋತ್ರಗಳನ್ನು ಕರೆದಾಗ ಜೆರಹನ ಗೋತ್ರವು ಸಿಕ್ಕಿಕೊಂಡಿತು. ಅ ಗೋತ್ರದ ಕುಟುಂಬಗಳನ್ನು ಕರೆದಾಗ ಜಬ್ದೀಯ ಕುಟುಂಬವು ಹಿಡಿಯಲ್ಪಟ್ಟಿತು.18ಆ ಕುಟುಂಬದ ಪುರುಷರನ್ನು ಕರೆದಾಗ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯನ ಮಗನೂ ಆದ ಆಕಾನನು ಹಿಡಿಯಲ್ಪಟ್ಟನು.19ಆಗ ಯೆಹೋಶುವನು ಆಕಾನನಿಗೆ <<ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ>> ಅಂದನು.20-21ಆಕಾನನು, <<ನಾನು ಇಂಥ ಕಾರ್ಯವನ್ನು ಮಾಡಿ ಇಸ್ರಾಯೇಲಿನ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡ್ದಿದು ನಿಜ. ನಾನು ಕೊಳ್ಳೆಯಲ್ಲಿ ಶಿನಾರ್ ದೇಶದ ಒಂದು ಉತ್ತಮವಾದ ನಿಲುವಂಗಿಯನ್ನೂ ಇನ್ನೂರು ರೂಪಾಯಿ ತೂಕದ ಬೆಳ್ಳಿಯನ್ನೂ ಐವತ್ತು ರೂಪಾಯಿ ತೂಕದ ಬಂಗಾರದ ಗಟ್ಟಿಯನ್ನೂ ಕಂಡು ಅದನ್ನು ಮೋಹಿಸಿ ಆಸೆಯಿಂದ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿರುತ್ತದೆ>> ಎಂದನು.22ಆಗ ಯೆಹೋಶುವನು ಆಳುಗಳನ್ನು ಕಳುಹಿಸಲು ಅವರು ಓಡಿಹೋಗಿ ಹುಡುಕಲಾಗಿ ಆ ನಿಲುವಂಗಿಯು ಗುಡಾರದಲ್ಲಿ ಹೂತಿಡಲಾಗಿತ್ತು. ಬೆಳ್ಳಿಯು ಅದರ ಕೆಳಗೆ ಇತ್ತು.23ಆಳುಗಳು ಅವುಗಳನ್ನು ಗುಡಾರದೊಳಗಿನಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಾಯೇಲ್ಯರೂ ಇದ್ದಲ್ಲಿಗೆ ಬಂದು ಯೆಹೋವನ ಮುಂದಿಟ್ಟರು.24ಯೆಹೋಶುವನೂ ಮತ್ತು ಎಲ್ಲಾ ಇಸ್ರಾಯೇಲ್ಯರೂ, ಜೆರಹನ ಮಗನಾದ ಆಕಾನನನ್ನು ಹಿಡಿದು ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿ, ಅವನ ಗಂಡುಹೆಣ್ಣು ಮಕ್ಕಳನ್ನು, ದನ ಕರು, ಕತ್ತೆ, ಆಡುಕುರಿಗಳನ್ನು ಮತ್ತು ಗುಡಾರದ ಸಹಿತವಾಗಿ ಹಿಡಿದು ಆಕೋರಿನ ತಗ್ಗಿಗೆ ಒಯ್ದರು.25ಆಗ ಯೆಹೋಶುವನು ಆಕಾನನಿಗೆ <<ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು>> ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.26ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ರಾಶಿಯು ನಿರ್ಮಾಣವಾಯಿತು. ಅದು ಇಂದಿನ ವರೆಗೂ ಇದೆ. ಆಗ ಯೆಹೋವನ ಕೋಪಾಗ್ನಿ ತಣ್ಣಗಾಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ.
8ಆಯಿ ಪಟ್ಟಣದ ಸ್ವಾಧೀನ
1ಅನಂತರ ಯೆಹೋವನು ಯೆಹೋಶುವನಿಗೆ <<ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ಕರೆದುಕೊಂಡು ಆಯಿ ಪಟ್ಟಣಕ್ಕೆ ಹೋಗು. ನೋಡು, ಆಯಿ ಎಂಬ ಊರಿನ ಅರಸ, ಪ್ರಜೆ, ನಗರ, ಸೀಮೆ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ.2ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ>> ಎಂದು ಆಜ್ಞಾಪಿಸಿದನು.3ಅಂತೆಯೇ ಯೆಹೋಶುವನು ಎದ್ದು ಭಟರೆಲ್ಲರ ಸಹಿತವಾಗಿ ಆಯಿಗೆ ಹೋಗುವುದಕ್ಕೋಸ್ಕರ ಸಿದ್ಧನಾಗಿ ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿ ಅವರಿಗೆ4<<ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ಪಟ್ಟಣಕ್ಕೆ ಬಹುದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರಿ.5ನಾನೂ ಮತ್ತು ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಹೋಗುವೆವು. ಅವರು ಮೊದಲಿನಂತೆ ನಮ್ಮೊಡನೆ ಯುದ್ಧಕ್ಕೆ ಬಂದ ಕೂಡಲೆ ನಾವು ಓಡಿ ಹೋಗುವೆವು.6ಇವರು ಮೊದಲಿನಂತೆ ನಮಗೆ ಹೆದರಿ ಓಡಿಹೋಗುತ್ತಿದ್ದಾರೆಂದು ತಿಳಿದು ಅವರು ನಮ್ಮನ್ನು ಹಿಂದಟ್ಟುವರು; ನಾವು ಓಡುತ್ತಲೇ ಇರುವೆವು.7ನಾವೂ ಅವರೂ ಪಟ್ಟಣದಿಂದ ದೂರವಾದ ಕೂಡಲೇ ನೀವು ಹೊಂಚಿ ಕುಳಿತ್ತಿದ್ದ ಸ್ಥಳದಿಂದ ಎದ್ದು ಪಟ್ಟಣದೊಳಗೆ ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮ ಕೈಗೆ ಒಪ್ಪಿಸುವನು.8ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿ ಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ>> ಎಂದು ಹೇಳಿ ಅವರನ್ನು ರಾತ್ರಿಯಲ್ಲಿಯೇ ಕಳುಹಿಸಿದನು.9ಅವರು ಹೊಂಚುಹಾಕುವುದಕ್ಕೆ ಹೊರಟುಹೋಗಿ ಬೇತೇಲಿಗೂ ಆಯಿಗೂ ನಡುವೆ ಆಯಿ ಎಂಬ ಊರಿನ ಪಶ್ಚಿಮದಲ್ಲಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯನ್ನು ಜನರ ಮಧ್ಯದಲ್ಲಿ ಕಳೆದನು.10ಅವನು ಬೆಳಿಗ್ಗೆ ಎದ್ದು ಇಸ್ರಾಯೇಲ್ಯರ ಹಿರಿಯರ ಸಂಗಡ ಸೈನ್ಯವನ್ನು ಕೂಡಿಸಿ ಅವರ ಮುಂದಾಗಿ ಆಯಿಗೆ ಹೊರಟನು.11ಅವನ ಸಂಗಡ ಇದ್ದ ಭಟರೆಲ್ಲರೂ ಗಟ್ಟಾಹತ್ತಿ ಪಟ್ಟಣದ ಸಮೀಪಕ್ಕೆ ಬಂದು ಅದರ ಉತ್ತರದಿಕ್ಕಿನಲ್ಲಿ ಇಳಿದುಕೊಂಡರು. ಅವರಿಗೂ ಆಯಿಗೂ ನಡುವೆ ಒಂದು ತಗ್ಗು ಇತ್ತು.12ಯೆಹೋಶುವನು ಹೆಚ್ಚುಕಡಿಮೆ ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ಇರುವ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕೋಸ್ಕರ ಇರಿಸಿದನು.13ಪಟ್ಟಣದ ಉತ್ತರದಲ್ಲಿದ್ದ ಎಲ್ಲಾ ಸೈನ್ಯವನ್ನೂ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನೂ ಕ್ರಮಪಡಿಸಿಕೊಂಡು ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಗೆ ಹೋದನು.14ಆಯಿ ಎಂಬ ಊರಿನ ಅರಸನು ಬೆಳಿಗ್ಗೆ ಇದನ್ನು ತಿಳಿದು ತ್ವರೆಯಾಗಿ ಜನರೆಲ್ಲರ ಸಹಿತವಾಗಿ ಇಸ್ರಾಯೇಲ್ಯರ ವಿರುದ್ಧ ಯುದ್ಧ ಮಾಡುವುದಕ್ಕೆ ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ಕಣಿವೆಯ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಪಟ್ಟಣದ ಹಿಂಭಾಗದಲ್ಲಿ ಹೊಂಚಿನೋಡುತ್ತಿರುವುದು ಅವನಿಗೆ ಗೊತ್ತಿರಲಿಲ್ಲ.15ಯೆಹೋಶುವನೂ ಅವನ ಸಂಗಡ ಇದ್ದ ಇಸ್ರಾಯೇಲ್ಯರೆಲ್ಲರೂ ತಾವು ಸೋತವರೋ ಎಂಬಂತೆ ಅರಣ್ಯಮಾರ್ಗವಾಗಿ ಓಡತೊಡಗಿದರು.16ಆಯಿ ಎಂಬ ಪಟ್ಟಣದವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣವನ್ನು ದೂರವಾಗಿ ಓಡತೊಡಗಿದರು.17ಆಯಿ ಎಂಬ ಊರಿನಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರಬಾಗಿಲುಗಳನ್ನು ತೆರೆದು ಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವುದಕ್ಕೋಸ್ಕರ ಹೊರಟರು.18ಯೆಹೋವನು ಯೆಹೋಶುವನಿಗೆ <<ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಊರಿನ ಕಡೆಗೆ ಚಾಚು; ಆ ಪಟ್ಟಣವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ>> ಎನ್ನಲು ಅವನು ಅದನ್ನು ಚಾಚಿದನು.19ಅವನು ಈಟಿಯನ್ನು ಚಾಚಿದ ಕೂಡಲೆ ಹೊಂಚಿನೋಡುತ್ತಿದ್ದವರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ಪಟ್ಟಣದೊಳಕ್ಕೆ ನುಗ್ಗಿ ಕೂಡಲೆ ಅದಕ್ಕೆ ಬೆಂಕಿ ಹಚ್ಚಿದರು.20ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶದೆತ್ತರಕ್ಕೆ ಏರಿಹೋಗುವುದನ್ನು ಕಂಡು ಯಾವ ಮಾರ್ಗದಿಂದಲೂ ತಪ್ಪಿಸಿಕೊಳ್ಳಲಾರದೆ ಇದ್ದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.21ಯೆಹೋಶುವನೂ ಇಸ್ರಾಯೇಲ್ಯರೂ ಪಟ್ಟಣವು ಹೊಂಚಿ ನೋಡುತ್ತಿದ್ದವರಿಗೆ ಸ್ವಾಧೀನವಾದದ್ದನ್ನೂ, ಹೊಗೆಯು ಆಕಾಶಕ್ಕೆ ಏರಿಹೋಗುತ್ತಿದ್ದದ್ದನ್ನೂ ಕಂಡು ಹಿಂದಿರುಗಿ ಬಂದು ಆಯಿ ಊರಿನ ಜನರನ್ನು ಸಂಹರಿಸಿದರು.22ಪಟ್ಟಣದೊಳಗೆ ನುಗ್ಗಿದವರೂ ಒಟ್ಟಿಗೆ ಸೇರಿದ್ದರಿಂದ ಆಯಿ ಎಂಬ ಊರಿನವರು ಆ ಕಡೆಯಿಂದಲೂ ಈ ಕಡೆಯಿಂದಲೂ ಇದ್ದ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿಬಿದ್ದರು. ಅವರು ಎಲ್ಲರನ್ನೂ ಕೊಂದು ಹಾಕಿದರು. ಒಬ್ಬನಾದರೂ ಉಳಿಯಲಿಲ್ಲ, ಯಾವನೂ ತಪ್ಪಿಸಿಕೊಳ್ಳಲಿಲ್ಲ.23ಆಯಿ ಎಂಬ ಪಟ್ಟಣದ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.24ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.25ಆ ದಿನ ಆಯಿ ಎಂಬ ಊರಿನಲ್ಲಿ ಸತ್ತ ಗಂಡಸರ ಮತ್ತು ಹೆಂಗಸರ ಸಂಖ್ಯೆ ಹನ್ನೆರಡು ಸಾವಿರ ಮಂದಿ.26ಪಟ್ಟಣದವರೆಲ್ಲರೂ ಹತರಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.27ಯೆಹೋವನು ಯೆಹೋಶುವನಿಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಆ ಪಟ್ಟಣದೊಳಗಿಂದ ಪಶು ಪ್ರಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು.28ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಎಂದಿಗೂ ತಿರುಗಿ ಕಟ್ಟಲು ಸಾಧ್ಯವಾಗದಂತೆ ಹಾಳುದಿಬ್ಬವನ್ನಾಗಿ ಮಾಡಿದನು. ಅದು ಇಂದಿನ ವರೆಗೂ ಹಾಗೆಯೇ ಉಳಿದಿದೆ.29ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ.ಏಬಾಲ್ ಬೆಟ್ಟದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದೂ ಧರ್ಮಶಾಸ್ತ್ರವನ್ನು ಪಾರಾಯಣಮಾಡಿದ್ದೂ
30ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಉಳಿಯು ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು31ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.32ಯೆಹೋಶುವನು ಅಲ್ಲಿದ್ದ ಕಲ್ಲುಗಳ ಮೇಲೆ ಜನರೆಲ್ಲರ ಸಮಕ್ಷಮದಲ್ಲಿ ಮೋಶೆಯ ಧರ್ಮಶಾಸ್ತ್ರದ ಒಂದು ಪ್ರತಿಯನ್ನು ಬರೆದನು.33ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು.34ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಅಶೀರ್ವಾದದ ವಾಕ್ಯಗಳನ್ನು ಹಾಗೂ ಶಾಪವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು.35ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಹೆಂಗಸರಿಗೂ, ಚಿಕ್ಕವರಿಗೂ, ಪರದೇಶದವರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಅದನ್ನು ಓದಿದನು.
9ಗಿಬ್ಯೋನ್ಯರು ಯುಕ್ತಿಯಿಂದ ಉಳಿದದ್ದೂ, ಇಸ್ರಾಯೇಲರಿಗೆ ದಾಸರಾದದ್ದೂ
1ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ2ಒಂದೇ ಮನಸ್ಸಿನಿಂದ ಯೆಹೋಶುವನಿಗೂ ಇಸ್ರಾಯೇಲ್ಯರಿಗೂ ವಿರೋಧವಾಗಿ ಯುದ್ಧಮಾಡುವುದಕ್ಕೆ ಕೂಡಿಕೊಂಡರು.3ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು4ಅವರು ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿ ತಟ್ಟುಗಳನ್ನು ಹಾಕಿ, ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು,5ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.6ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಾಯೇಲ್ಯರಿಗೂ <<ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಬೇಕು>> ಎಂದು ಕೇಳಿ ಕೊಂಡರು.7ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ <<ಬಹುಶಃ ನೀವು ನಮ್ಮ ದೇಶದ ನಿವಾಸಿಗಳೇ ಆಗಿರಬಹುದು. ಹೀಗಿರುವುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?>> ಎಂದು ಉತ್ತರಕೊಟ್ಟರು.8ಅವರು ಯೆಹೋಶುವನಿಗೆ <<ನಾವು ನಿಮ್ಮ ದಾಸರು>> ಎಂದರು. ಯೆಹೋಶುವನು ಅವರನ್ನು <<ನೀವು ಯಾರು? ಎಲ್ಲಿಯವರು?>> ಎಂದು ವಿಚಾರಿಸಿದನು.9ಅವರು <<ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.10ಹೆಷ್ಬೋನಿನ ಅರಸನಾದ ಸೀಹೋನ್, ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಯೆಹೋವನು ಮಾಡಿದ್ದೆಲ್ಲವನ್ನೂ ಕೇಳಿದ್ದಾರೆ.11<ನೀವು ಪ್ರಯಾಣಕ್ಕೋಸ್ಕರ ಬುತ್ತೀ ಕಟ್ಟಿಕೊಂಡು ಹೋಗಿ ಇಸ್ರಾಯೇಲ್ಯರನ್ನು ಎದುರುಗೊಂಡು <<ನಾವು ನಿಮ್ಮ ಸೇವಕರು>>, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಬೇಕು ಎಂಬುದಾಗಿ ಅವರನ್ನು ಬೇಡಿಕೊಳ್ಳಿರಿ ಎಂದು ಹೇಳಿ ನಮ್ಮನ್ನು ಕಳುಹಿಸಿದರು.12ನಾವು ನಿಮ್ಮನ್ನು ಎದುರುಗೊಳ್ಳುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೋಸ್ಕರ ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರುಚೂರಾಗಿದೆ ನೋಡಿರಿ.13ನಾವು ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು; ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘಪ್ರಯಾಣದಿಂದ ಸವೆದುಹೋಗಿವೆ> >> ಎಂದು ವಿವರಿಸಿದರು.14ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.15ಯೆಹೋಶುವನು ಅವರೊಡನೆ <<ನಿಮ್ಮ ಜೀವವನ್ನು ಕಾಪಾಡುತ್ತೇವೆ>> ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು.16ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದು ತಮ್ಮ ಮಧ್ಯದಲ್ಲಿಯೇ ವಾಸಿಸುವವರೆಂದು ಇಸ್ರಾಯೇಲ್ಯರಿಗೆ ಗೊತ್ತಾಯಿತು.17ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.18ಸಭೆಯ ನಾಯಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರು ತಮ್ಮ ನಾಯಕರಿಗೆ ವಿರೋಧವಾಗಿ ಗೊಣಗಾಡಿದರು.19ಆಗ ನಾಯಕರೆಲ್ಲರು ಸಭೆಯ ಎಲ್ಲಾ ಸದಸ್ಯರಿಗೆ <<ನಾವು ಇಸ್ರಾಯೇಲರ ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು.20ನಾವು ಇಟ್ಟ ಆಣೆಯ ನಿಮಿತ್ತ ದೇವರ ಕೋಪವು ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದುಳಿಸಬೇಕು. ನಾವು ಹೀಗೆ ಮಾಡೋಣ, ಅವರನ್ನು ಜೀವದಿಂದ ಉಳಿಸಿ ಬಿಟ್ಟುಬಿಡೋಣ21ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಸೀಳುವವರೂ ನೀರು ಹೊರುವವರೂ ಆಗಿರಲಿ>> ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.22ಯೆಹೋಶುವನು ಗಿಬ್ಯೋನ್ಯರನ್ನು ಕರೆಸಿ ಅವರಿಗೆ <<ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ ಬಹು ದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ?23ಇದರಿಂದ ನೀವು ಶಾಪಗ್ರಸ್ತರು! ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಹೊಡೆಯುವವರೂ ನೀರುತರುವವರೂ ಆಗಿರಬೇಕು>> ಎಂದನು.24ಅವರು ಯೆಹೋಶುವನಿಗೆ <<ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ <ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು> ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.25ಇಗೋ, ಈಗ ನಾವು ನಿನ್ನ ಕೈಯಲ್ಲಿದ್ದೇವೆ; ನಿನಗೆ ಯಾವುದು ಒಳ್ಳೆಯದು, ನ್ಯಾಯವಾದುದ್ದು ಎಂದು ತೋರುತ್ತದೋ ಅದರಂತೆ ನಮಗೆ ಮಾಡು>> ಎಂದು ಉತ್ತರಕೊಟ್ಟರು.26ಯೆಹೋಶುವನು ತಾನು ಮೊದಲು ಹೇಳಿದಂತೆಯೇ ಮಾಡಿದನು. ಅವನು ಅವರನ್ನು ಇಸ್ರಾಯೇಲ್ಯರ ಕೈಯಿಂದ ಹತರಾಗದಂತೆ ತಪ್ಪಿಸಿದನು.27ಇಸ್ರಾಯೇಲ್ಯರಿಗಾಗಿ ಯೆಹೋವನು ಆರಿಸಿಕೊಂಡ ಸ್ಥಳದಲ್ಲಿ ಕಟ್ಟಲಾಗುವ ಆತನ ಯಜ್ಞವೇದಿಗೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ಹೊರುವವರನ್ನಾಗಿ ಅವರನ್ನು ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸವನ್ನು ಮಾಡಿಕೊಂಡು ಇಸ್ರಾಯೇಲ್ಯರೊಂದಿಗಿದ್ದಾರೆ.
10ಯೆಹೋಶುವನು ಗಿಬ್ಯೋನಿನ ಬಳಿಯಲ್ಲಿ ಐದು ಮಂದಿ ಅರಸರನ್ನು ಸೋಲಿಸಿದ್ದು
1ಯೆಹೋಶುವನು ಆಯಿ ನಗರವನ್ನು, ಅದರ ಅರಸನನ್ನು ಹಿಡಿದು ಯೆರಿಕೋವನ್ನೂ ಅದರ ಅರಸನನ್ನೂ ಹೇಗೆ ಸಂಹರಿಸಿದನೆಂದು ಯೆರೂಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.2ಆಯಿ ಎಂಬ ಊರಿಗಿಂತ ದೊಡ್ಡದೂ, ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದ ಉಳಿಯುವುದಕ್ಕೋಸ್ಕರ ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುವುದನ್ನು ಕೇಳಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಬಹಳವಾಗಿ ಭಯಪಟ್ಟನು.3ಆದುದರಿಂದ ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು.4<<ನೀವು ಬಂದು ನನಗೆ ಸಹಾಯಮಾಡಿರಿ, ನಾವು ಯೆಹೋಶುವನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿರುವ ಗಿಬ್ಯೋನ್ಯರನ್ನು ಸೋಲಿಸೋಣ>> ಎಂದು ಹೇಳಿ ಕಳುಹಿಸಿದನು.5ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ಒಟ್ಟಾಗಿ ಸೇರಿ ದಂಡೆತ್ತಿ ಬಂದರು. ಅವರು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.6ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿದರು. <<ನಿಮ್ಮ ಸೇವಕರಾದ ನಮ್ಮನ್ನು ಕೈಬಿಡದೆ, ಬೇಗನೆ ಬಂದು ಸಹಾಯಮಾಡಿ ನಮಗೆ ವಿರೋಧವಾಗಿ ಸೇರಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿರಿ>> ಎಂದು ಬೇಡಿಕೊಂಡರು.7ಆಗ ಯೆಹೋಶುವನು ಎಲ್ಲಾ ಭಟರ ಮತ್ತು ಯುದ್ಧವೀರರ ಸಹಿತವಾಗಿ ಗಿಲ್ಗಾಲಿನಿಂದ ಹೊರಟನು.8ಯೆಹೋವನು ಯೆಹೋಶುವನಿಗೆ, ಅವರಿಗೆ <<ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ>> ಎಂದನು9ಯೆಹೋಶುವನು ಗಿಲ್ಗಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣಮಾಡಿ ತಟ್ಟನೆ ಅವರ ಮೇಲೆ ಬಿದ್ದನು.10ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.11ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.12ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು.<<ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು;
ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು>>
ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.
13ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವ ತನಕಸೂರ್ಯಚಂದ್ರರು ಹಾಗೆಯೇ ನಿಂತರು.
ಈ ಮಾತು ಯಾಷಾರ್ ಗ್ರಂಥದಲ್ಲಿ ಬರೆದಿದೆಯಲ್ಲವೆ?
ಹೀಗೆ ಸೂರ್ಯನು ಮುಳುಗಲು ಆತುರ ಪಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿಯೇ ನಿಂತನು.
14ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿನವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.15ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಗಿಲ್ಗಾಲಿನ ಪಾಳೆಯಕ್ಕೆ ಹಿಂದಿರುಗಿದನು.16ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದ ಗುಹೆಯಲ್ಲಿ ಅಡಗಿಕೊಂಡರು.17ಜನರು ಯೆಹೋಶುವನಿಗೆ <<ಆ ಐದು ಮಂದಿ ನಮಗೆ ಸಿಕ್ಕಿದ್ದಾರೆ. ಅವರು ಮಕ್ಕೇದದ ಗವಿಯಲ್ಲಿ ಅಡಗಿಕೊಂಡಿದ್ದಾರೆ>> ಎಂದು ತಿಳಿಸಿದರು.18ಆಗ ಯೆಹೋಶುವನು ಅವರಿಗೆ <<ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕಾವಲುಗಾರರನ್ನು ಇಡಿರಿ. ನೀವಾದರೂ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದೆ ಬರುವ ಶತ್ರುಗಳನ್ನು ಹತಮಾಡುತ್ತಾ ಹೋಗಿರಿ.19ಅವರನ್ನು ಅವರ ಪಟ್ಟಣಗಳಲ್ಲಿ ಸೇರುವುದಕ್ಕೆ ಬಿಡಬೇಡಿರಿ. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನಲ್ಲಾ?>> ಎಂದನು.20ಈ ರೀತಿಯಾಗಿ ಯೆಹೋಶುವನೂ ಹಾಗೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆ ಕೊತ್ತಲುಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು.21ಇಸ್ರಾಯೇಲ್ಯರಾದರೋ ಮಕ್ಕೇದದಲ್ಲಿ ಇಳುಕೊಂಡಿದ್ದ ಯೆಹೋಶುವನ ಬಳಿಗೆ ಸುರಕ್ಷಿತರಾಗಿ ಬಂದರು. ಇಸ್ರಾಯೇಲ್ಯರಿಗೆ ವಿರೋಧವಾಗಿ ಒಬ್ಬನೂ ಮಾತನಾಡಲಿಲ್ಲ.22ಅನಂತರ ಯೆಹೋಶುವನು ಜನರಿಗೆ <<ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿರಿ>> ಎಂದನು.23ಅವರು ಹೋಗಿ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅರಸರನ್ನು ಗವಿಯಿಂದ ಎಳೆದು ಕೊಂಡು ಅವನ ಬಳಿಗೆ ತಂದರು.24ಅವರನ್ನು ತನ್ನ ಬಳಿಗೆ ತಂದನಂತರ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ <<ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ>> ಎಂದು ಹೇಳಿದನು. ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.25ಆಗ ಅವನು ಅವರಿಗೆ <<ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು>> ಎಂದು ಹೇಳಿದನು.26ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.27ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲಿಯೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇರುತ್ತವೆ.ಕಾನಾನ್ ದೇಶದ ದಕ್ಷಿಣ ಭಾಗವು ಇಸ್ರಾಯೇಲ್ಯರಿಗೆ ವಶವಾದದ್ದು
28ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು.29ಯೆಹೋಶುವನು ಜನರೆಲ್ಲರ ಸಹಿತವಾಗಿ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.30ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈವಶಮಾಡಿದನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು.31ಅಲ್ಲಿಂದ ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಾಕೀಷಿಗೆ ಹೋಗಿ ಮುತ್ತಿಗೆಹಾಕಿ ಯುದ್ಧಮಾಡಿದನು.32ಯೆಹೋವನು ಅದನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದರಿಂದ, ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ನದವರಿಗಾದ ಗತಿಯೇ ಇವರಿಗೂ ಆಯಿತು.33ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ.34ತರುವಾಯ ಯೆಹೋಶುವನು ಲಾಕೀಷನ್ನು ಬಿಟ್ಟು ಇಸ್ರಾಯೇಲ್ಯರೆಲ್ಲರ ಸಹಿತವಾಗಿ ಎಗ್ಲೋನಿಗೆ ಬಂದು ಮುತ್ತಿಗೆಹಾಕಿ ಯುದ್ಧಮಾಡಿದನು.35ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನವರಿಗೆ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕತ್ತಿಯಿಂದ ಸಂಹರಿಸಿಬಿಟ್ಟರು.36ಅನಂತರ ಯೆಹೋಶುವನೂ, ಇಸ್ರಾಯೇಲರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ37ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ; ಪಟ್ಟಣವನ್ನೂ ಜನರನ್ನೂ ನಾಶಮಾಡಿದರು.38ಅಲ್ಲಿಂದ ಯೆಹೋಶುವನೂ ಎಲ್ಲಾ ಇಸ್ರಾಯೇಲರೂ ದೆಬೀರಿಗೆ ಬಂದು ಅಲ್ಲಿಯವರೊಡನೆ ಯುದ್ಧಮಾಡಿದರು.39ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.40ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.41ಕಾದೇಶ್ ಬರ್ನೇಯದಿಂದ ಗಾಜಾ ಊರಿನ ವರೆಗೂ ಗೋಷೆನ್ ಪ್ರಾಂತ್ಯದಿಂದ ಗಿಬ್ಯೋನಿನವರೆಗೂ ಎಲ್ಲರನ್ನೂ ಸೋಲಿಸಿದನು.42ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.43ತರುವಾಯ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರೊಡನೆ ಗಿಲ್ಗಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು. 11ಕಾನಾನ್ ದೇಶದ ಉತ್ತರ ಭಾಗವು ಇಸ್ರಾಯೇಲರ ವಶವಾದದ್ದು
1ಹಾಚೋರಿನ ಅರಸನಾದ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮಾದೋನಿನ ಅರಸನು ಶಿಮ್ರೋನಿನ ಅರಸನನ್ನು ಅಕ್ಷಾಫಿನ ಅರಸನನ್ನು, ಉತ್ತರ ದಿಕ್ಕಿನ ಪರ್ವತ ಪ್ರದೇಶ,2ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದ ಪ್ರದೇಶ, ಇಳುಕಲ್ಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ, ಇವುಗಳ ಅರಸರನ್ನೂ ಪೂರ್ವಪಶ್ಚಿಮಗಳಲ್ಲಿರುವ3ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ತಗ್ಗಿನಲ್ಲಿದ್ದ ಮಿಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೆಕಳುಹಿಸಿದನು.4ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು.5ಈ ಎಲ್ಲಾ ಅರಸರು ಒಟ್ಟಾಗಿ ಸೇರಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವುದಕ್ಕಾಗಿ ಇಳಿದುಕೊಂಡರು.6ಆಗ ಯೆಹೋವನು <<ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು>> ಅಂದನು.7ಯೆಹೋಶುವನು ಮಿಚ್ಪೆಯ ತನ್ನ ಎಲ್ಲಾ ಭಟರೊಡನೆ ಹೊರಟು ಹೋಗಿ, ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಪಕ್ಕನೆ ಬಿದ್ದನು.8ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.9ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ರಥಗಳನ್ನು ಸುಟ್ಟುಬಿಟ್ಟನು.10ಕೂಡಲೇ ಯೆಹೋಶುವನು ಹಿಂದಿರುಗಿ ಹಾಚೋರನನ್ನೂ ಅವರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಂಬುವುದು ಪೂರ್ವಕಾಲದಲ್ಲಿ ಆ ಎಲ್ಲಾ ರಾಜ್ಯಗಳಿಗಿಂತಲು ಶ್ರೇಷ್ಠವಾಗಿತ್ತು.11ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಜೀವಿಯಾದರೂ ಉಳಿಯಲಿಲ್ಲ.12ನಂತರ ಯೆಹೋಶುವನು ಉಳಿದ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನು ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.13ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಾಯೇಲರು ದಿನ್ನೆಯ ಮೇಲಿನ ಬೇರೆ ಯಾವ ಪಟ್ಟಣವನ್ನೂ ಸುಟ್ಟುಹಾಕಲಿಲ್ಲ.14ಇಸ್ರಾಯೇಲರು ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ವಸ್ತುಗಳನ್ನೂ ಕೊಳ್ಳೆ ಹೊಡೆದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲ ಮಾಡಿದರು. ಉಸಿರಿರುವ ಒಂದನ್ನೂ ಅವರು ಉಳಿಸಲಿಲ್ಲ.15ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು, ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಮೀರಲಿಲ್ಲ.ಯುದ್ಧ ಫಲವು
16ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷೆನ್ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.17ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನಿನ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ದೇಶವನ್ನೆಲ್ಲಾ ಸೆರೆಹಿಡಿದು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.18ಯೆಹೋಶುವನು ಈ ಎಲ್ಲಾ ಅರಸರೊಡನೆ ಬಹು ದಿನಗಳವರೆಗೂ ಯುದ್ಧ ಮಾಡಿದನು.19ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರು ಹೊರತು ಯಾವ ಪಟ್ಟಣದವರೂ ಇಸ್ರಾಯೇಲರೊಡನೆ ಒಪ್ಪಂದಮಾಡಿಕೊಳ್ಳಲಿಲ್ಲ ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು.20ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.21ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.22ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.23ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.
12ಇಸ್ರಾಯೇಲ್ಯರು ಸೋಲಿಸಿದ ಅರಸರ ಪಟ್ಟಿ
1ಇಸ್ರಾಯೇಲ್ಯರು ಯೊರ್ದನ್ ನದಿಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.2ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾಗಿದ್ದವನು ಸೀಹೋನ್. ಇವನು ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ಕಣಿವೆಯಲ್ಲಿಯೇ ಇದ್ದ ಪಟ್ಟಣಗಳು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧಪ್ರಾಂತ್ಯವು3ಹಾಗೂ ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ:4ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥರು ಬಾಷಾನಿನ ಅರಸನೂ ಆದ ಓಗನು ಸಂಹರಿಸಲ್ಪಟ್ಟವರಲ್ಲಿ ಎರಡನೆಯವನು.5ಇವನ ರಾಜ್ಯ- ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಕಾ ಪಟ್ಟಣವು, ಗೆಷೂರ್ಯರ ಮತ್ತು ಮಾಕತೀಯರ ಮೇರೆವರೆಗೆ ಇದ್ದ ಬಾಷಾನಿನ ಸೀಮೆ, ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗೆ ಇದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದ ವರೆಗಿದ್ದಿತ್ತು.6ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು.7ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶಗಳು,8ಇಳುಕಲ್ಲಿನ ಪ್ರದೇಶಗಳು, ಕಣಿವೆ ಪ್ರದೇಶಗಳು, ಬೆಟ್ಟಗಳ ಬುಡದಲ್ಲಿರುವ ಸೀಮೆಗಳು, ಅರಣ್ಯದ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ದೇಶಗಳನ್ನು ಇಸ್ರಾಯೇಲರ ಕುಲದವರಿಗೆ ಶಾಶ್ವತ ಆಸ್ತಿಯಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗೆಂದರೆ,9ಯೆರಿಕೋವಿನ ಅರಸನು - 1ಬೇತೇಲ್ ಬಳಿಯಲ್ಲಿರುವ ಆಯಿ ಎಂಬ ಊರಿನ ಅರಸನು - 1
10ಯೆರೂಸಲೇಮಿನ ಅರಸನು - 1ಹೆಬ್ರೋನಿನ ಅರಸನು - 1
11ಯರ್ಮೂತಿನ ಅರಸನು - 1ಲಾಕೀಷಿನ ಅರಸನು - 1
12ಎಗ್ಲೋನಿನ ಅರಸನು - 1ಗೆಜೆರಿನ ಅರಸನು - 1
13ದೆಬೀರಿನ ಅರಸನು - 1ಗೆದೆರಿನ ಅರಸನು - 1
14ಹೊರ್ಮದ ಅರಸನು - 1ಅರಾದಿನ ಅರಸನು - 1
15ಲಿಬ್ನದ ಅರಸನು - 1ಅದುಲ್ಲಾಮಿನ ಅರಸನು - 1
16ಮಕ್ಕೇದದ ಅರಸನು - 1ಬೇತೇಲಿನ ಅರಸನು - 1
17ತಪ್ಪೂಹದ ಅರಸನು - 1ಹೇಫೆರಿನ ಅರಸನು - 1
18ಅಫೇಕದ ಅರಸನು - 1ಲಷ್ಷಾರೋನಿನ ಅರಸನು - 1
19ಮಾದೋನಿನ ಅರಸನು - 1ಹಾಚೋರಿನ ಅರಸನು.
20ಶಿಮ್ರೋನ್ಮೆರೋನಿನ ಅರಸನು - 1ಅಕ್ಷಾಫಿನ ಅರಸನು - 1
21ತಾನಕದ ಅರಸನು - 1ಮೆಗಿದ್ದೋವಿನ ಅರಸನು - 1
22ಕೆದೆಷಿನ ಅರಸನು - 1ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು - 1
23ದೋರ್ ಪ್ರಾಂತ್ಯದ ದೋರಿನ ಅರಸನು - 1ಗಿಲ್ಗಾಲಿನ ಅರಸನು - 1
24ತಿರ್ಚದ ಅರಸನು - 1ಒಟ್ಟು 31 ಮಂದಿ ಅರಸರು.
13ಸ್ವಾಧೀನವಾಗಬೇಕಿದ್ದ ಭೂಮಿ
1ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, <<ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.2ಅವುಗಳು ಯಾವುವೆಂದರೆ: ಐಗುಪ್ತದ ಈಚೆಯಲ್ಲಿರುವ ಶೀಹೋರ್ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿರುವ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ3ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದ ಫಿಲಿಷ್ಟಿಯ ಪ್ರಾಂತ್ಯ; ಗೆಷೂರ್ಯರ ಸೀಮೆಯು,4ದಕ್ಷಿಣದಲ್ಲಿದ್ದ ಅವ್ವೀಯರ ದೇಶ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು5ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯ ವರೆಗಿರುವ ಲೆಬನೋನಿನ ಪೂರ್ವ ಪ್ರದೇಶ;6ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ, ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳು. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೂ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ ಇವುಗಳನ್ನು ಸೇರಿಸಿ ದೇಶವನ್ನೆಲ್ಲಾ7ಒಂಭತ್ತು ಕುಲಗಳಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಪಾಲು ಮಾಡಿ ಕೊಡು>> ಎಂದನು.ಯೊರ್ದನಿನ ದಿಕ್ಕಿನಲ್ಲಿರುವ ಪ್ರದೇಶದ ವಿಭಜನೆ
8ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:9ಅರ್ನೋನಿನ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ, ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲ ಸೀಮೆ;10ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ವಶದಲ್ಲಿದ್ದ ಅಮ್ಮೋನಿಯರ ಮೇರೆಯ ಈಚೆಗೆ ಇದ್ದಂಥ ಎಲ್ಲಾ ಪಟ್ಟಣಗಳು; ಗಿಲ್ಯಾದ್ ಸೀಮೆ11ಗೆಷೂರ‍್ಯರ ಮತ್ತು ಮಾಕತೀಯರ ಪ್ರಾಂತ್ಯಗಳು ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶ,12ಅಷ್ಟರೋತ್ ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದ ಸಲ್ಕಾ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳೂ. ಮೋಶೆ ಅವರನ್ನು ಗೆದ್ದು ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.13ಇಸ್ರಾಯೇಲ್ಯರು ಗೆಷೂರ‍್ಯರನ್ನೂ, ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಲಿಲ್ಲ. ಏಕೆಂದರೆ ಆದ್ದರಿಂದ ಗೆಷೂರ‍್ಯರೂ ಮಾಕತೀಯರೂ ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿ ಇರುತ್ತಾರೆ.14ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯವಾಗಿತ್ತು.15ಮೋಶೆಯು ರೂಬೇನ್ಯರ ಮಕ್ಕಳ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:16ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ;17ಮೇದೆಬದ ತಪ್ಪಲ ಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣ, ಅಲ್ಲೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್ ಬೇತ್ಬಾಳ್ಮೆಯೋನ್,18ಯಹಚಾ ಕೆದೇಮೋತ್, ಮೇಫಾಯತ್,19ಕಿರ್ಯಾತಯಿಮ್ ಸಿಬ್ಮಾ ಎಂಬ ಹೆಷ್ಬೋನಿನ ಉಪಗ್ರಾಮಗಳು, ಕಣಿವೆಯಲ್ಲಿರುವ ಬೆಟ್ಟದ ಮೇಲಿನ ಚೆರೆತ್ ಶಹರ್,20ಬೇತ್‍ಪೆಗೋರ್, ಎಂಬ ಪಟ್ಟಣಗಳೂ ಪಿಸ್ಗಾದ ಬುಡದಲ್ಲಿರುವ ಸೀಮೆ, ಬೇತ್‌ಯೆಷಿಮೋತ್ ಪಟ್ಟಣ,21ಒಟ್ಟಾರೆ ಮೀಶೋರೆಂಬ ಎತ್ತರವಾದ ಬಯಲಿನಲ್ಲಿದ್ದ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನಿನ ಸಮಸ್ತ ರಾಜ್ಯಗಳು. ಮೋಶೆಯು ಆ ದೇಶದಲ್ಲಿ ವಾಸವಾಗಿದ್ದ ಸೀಹೋನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ ಪ್ರಭುಗಳಾಗಿರುವ ಅವನ ಸರದಾರರನ್ನೂ ಕೊಂದುಹಾಕಿದನು.22ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನಾಗಿದ್ದ ಬಿಳಾಮನೂ ಇದ್ದನು.23ಯೊರ್ದನ್ ನದಿಯು, ರೂಬೇನ್ಯರ ಪಡುವಣ ಮೇರೆಯಾಗಿತ್ತು. ರೂಬೇನ್ಯರ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಗ್ರಾಮನಗರಗಳು ಇವುಗಳೇ.24ಮೋಶೆಯು ಗಾದ್ ಕುಲದ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:25ಹೆಷ್ಬೋನಿನ ಅರಸನಾದ ಸೀಹೋನಿನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧ ರಾಜ್ಯ,26ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,27ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.28ಈ ಎಲ್ಲಾ ಗ್ರಾಮನಗರಗಳು ಗಾದ್ ಕುಲದ ಸ್ವತ್ತಾದವು.29ಮಹನಯಿಮಿನ ಉತ್ತರದಲ್ಲಿದ್ದ ಹಾಗೂ ಮೊದಲು ಬಾಷಾನಿನ ಅರಸನಾಗಿದ್ದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು,30ಮೋಶೆಯು ಮನಸ್ಸೆ ಕುಲದ ಅರ್ಧ ಗೋತ್ರಗಳಿಗೆ ಕೊಟ್ಟನು. ಯಾಯೀರನ ಗ್ರಾಮಗಳೆನ್ನಿಸಿಕೊಳ್ಳುವ ಅರವತ್ತು ಊರುಗಳು ಇದರೊಂದಿಗೆ ಇರುತ್ತವೆ.31ಗಿಲ್ಯಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು.32ಮೋಶೆಯು ಯೊರ್ದನಿನ ಆಚೆ ಯೆರಿಕೋವಿನ ಎದುರಿನಲ್ಲಿರುವ ಮೋವಾಬ್ಯರ ಬಯಲಿನಲ್ಲಿದ್ದಾಗ ಇವುಗಳನ್ನು ಅವರಿಗೆ ಸ್ವತ್ತಾಗಿ ಕೊಟ್ಟನು.33ಆದರೆ ಲೇವಿಯ ಕುಲಕ್ಕೆ ಮೋಶೆಯು ಯಾವ ಸ್ವತ್ತನ್ನು ಕೊಡಲಿಲ್ಲ. ಯಾಕೆಂದರೆ ಇಸ್ರಾಯೇಲ್ಯರ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ಆತನೇ ಅವರ ಸ್ವತ್ತಾಗಿದ್ದನು.
14ಯೊರ್ದನಿನ ಪಶ್ಚಿಮದಲ್ಲಿರುವ ಪ್ರದೇಶವನ್ನು ಉಳಿದ ಇಸ್ರಾಯೇಲರಿಗೆ ಹಂಚಿಕೊಟ್ಟದ್ದು
1ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ2ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯೊರ್ದನಿನ ಪಶ್ಚಿಮದ ಕಾನಾನ ದೇಶವನ್ನು ಚೀಟು ಹಾಕಿ ಇಸ್ರಾಯೇಲರ ಒಂಭತ್ತುವರೆ ಕುಲದವರಿಗೆ ಸ್ವತ್ತಾಗಿ ಕೊಟ್ಟನು3ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.4ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.5ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ದೇಶವನ್ನು ಹಂಚಿಕೊಂಡರು.ಕಾಲೇಬನ ಸ್ವತ್ತು
6ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ <<ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.7ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿ ನೋಡುವುದಕ್ಕೋಸ್ಕರ ಕಾದೇಶ್ ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಲ್ವತ್ತು ವರ್ಷವಾಗಿತ್ತು.8ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ.9ಮೋಶೆಯು ಆ ದಿನ ನನಗೆ <ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು> ಎಂದು ಪ್ರಮಾಣ ಮಾಡಿ ಹೇಳಿದನು.10ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.11ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.12ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ>> ಅಂದನು.13ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.14ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.15ಅದರ ಹಿಂದಿನ ಹೆಸರು <<ಕಿರ್ಯತ್ಅರ್ಬ>> ಎಂಬುದಾಗಿತ್ತು. <<ಅರ್ಬ>> ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.
15ಯೆಹೂದ ಕುಲದ ಸ್ವತ್ತು
1ಎದೋಮ್ ಸೀಮೆಯೂ, ಚಿನ್ ಅರಣ್ಯದ ಮೇರೆಯಾಗಿರುವ ಕಾನಾನ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿತು.2ಅದರ ದಕ್ಷಿಣದ ಮೇರೆಯು ಲವಣ ಸಮುದ್ರದ ತೆಂಕಣ ಕೊನೆಯಿಂದ3ಅಕ್ರಬ್ಬೀಮ್ ಕಣಿವೆಯ ದಕ್ಷಿಣ ಮಾರ್ಗವಾಗಿ ಚಿನಿಗೆ ಹೋಗುತ್ತದೆ. ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ ಅಚ್ಮೋನಿನ ಮೇಲೆ,4ಐಗುಪ್ತದ ಹಳ್ಳಕ್ಕೆ ಬಂದು ಸಮುದ್ರತೀರವನ್ನು ಸೇರುವುದು. ಇದು ಅದರ ತೆಂಕಣ ಮೇರೆ.5ಯೊರ್ದನ್ ನದಿಯ ಮುಖದ್ವಾರದಿಂದ ಲವಣ ಸಮುದ್ರವೆಲ್ಲಾ, ಅದರ ಪೂರ್ವದಿಕ್ಕಿನ ಮೇರೆ ಆಗಿದೆ. ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನ್ ನದಿಯು ಲವಣ ಸಮುದ್ರದಿಂದ ಕೂಡುವ ಸ್ಥಳದಿಂದ6ಬೇತ್ ಹೊಗ್ಲಾ ಬೇತ್ ಆರಾಬದ ಉತ್ತರ ಪ್ರಾಂತ್ಯ ರೂಬೇನನ ಮಗನಾದ ಬೋಹನನ ಬಂಡೆ,7ಆಕೋರಿನ ಕಣಿವೆ ಇವುಗಳ ಮೇಲೆ ದೆಬೇರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಹಳ್ಳದ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್ ಏನ್ ಷೆಮೆಷ್ ಅನ್ನಿಸಿಕೊಳ್ಳುವ ಬುಗ್ಗೆ ಏನ್ ರೋಗೆಲ್ ಇವುಗಳ ಮೇಲೆ8ಬೆನ್ ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲಿರುವ ರೆಫಾಯೀಮ್ ಕಣಿವೆಯ ಉತ್ತರದಲ್ಲಿರುವ ಬೆಟ್ಟದ ತುದಿಗೆ ಹೋಗುತ್ತದೆ.9ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.10ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು11ಮುಂದೆ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರದಲ್ಲಿ ಮುಗಿಯುತ್ತದೆ.12ಮಹಾಸಾಗರದ ತೀರವೇ ಪಶ್ಚಿಮ ಮೇರೆಯು. ಯೆಹೂದಾ ಗೋತ್ರಗಳ ದೇಶದ ಸುತ್ತಣ ಮೇರೆಗಳು ಇವೇ.ಕಾಲೇಬನಿಗೆ ಕೊಡಲಾದ ಹೆಬ್ರೋನ್
13ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.14ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.15ಆನಂತರ ಅವನು ಹೊರಟು ಕಿರ್ಯತಸೇಫೆರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧ ಮಾಡಿದನು.16ಅವನು <<ಕಿರ್ಯತಸೇಫೆರನ್ನು ಹಿಡಿದುಕೊಳ್ಳವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ>> ಎಂದನು.17ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ವಶಪಡಿಸಿಕೊಂಡನು. ಅವನಿಗೆ ಕಾಲೇಬನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಟ್ಟನು.18ಆಕೆಯು ತನ್ನ ತಂದೆಯ ಮನೆ ಸೇರಿದಾಗ, ತನ್ನ ತಂದೆಯ ಹತ್ತಿರ ಭೂಮಿಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿಂದ ಇಳಿದಳು ಕಾಲೇಬನು, <<ನಿನಗೇನು ಬೇಕು>> ಎಂದು ಆಕೆಯನ್ನು ಕೇಳಲು19ಆಕೆಯು <<ನನಗೊಂದು ಕೊಡುಗೆ ಬೇಕು. ನನ್ನನ್ನು ದಕ್ಷಿಣ ದೇಶದ ಬೆಂಗಾಡಿಗೆ (ಬರಡು ಭೂಮಿ) ಕೊಟ್ಟುಬಿಟ್ಟೆಯಲ್ಲಾ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು>> ಎಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.ಯೆಹೂದ ಕುಲದವರಿಗೆ ದೊರೆತ ನಗರಗಳು ಹಾಗು ಗ್ರಾಮಗಳು
20ಯೆಹೂದದ ಕುಲಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ವಿವರ:21ಎದೋಮ್ ಪ್ರಾಂತ್ಯದ ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,22ಕೀನಾ, ದೀಮೋನ್, ಅದಾದ್,23ಕೆದೆಷ್, ಹಾಚೋರ್, ಇತ್ನಾನ್,24ಜೀಫ್, ಟೆಲೆಮ್, ಬೆಯಾಲೋತ್,25ಹಾಚೋರ್ ಹದತ್ತಾ, ಹಾಚೋರ್ ಎಂಬ ಕಿರ್ಯೋತ್, ಹೆಚ್ರೋನ್, ಹಾಚೋರ್,26ಅಮಾಮ್, ಶೆಮ, ಮೋಲಾದಾ,27ಹಚರ್ ಗದ್ದಾ, ಹೆಷ್ಮೋನ್, ಬೇತ್ಪೆಲೆಟ್,28ಹಚರ್ ಷೂವಾಲ್, ಬೇರ್ಷೆಬ, ಬಿಜ್ಯೋತ್ಯಾ,29ಬಾಲಾ, ಇಯ್ಯೀಮ್, ಎಚೆಮ್,30ಎಲ್ಟೋಲದ್, ಕೆಸೀಲ್, ಹೊರ್ಮಾ,31ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ,32ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಬತ್ತು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು,33ಇಳಿಜಾರು ಪ್ರದೇಶದಲ್ಲಿ ಎಷ್ಟಾವೋಲ್, ಚೊರ್ಗಾ, ಅಶ್ನಾ34ಜನೋಹ, ಏಂಗನ್ನೀಮ್,35ತಪ್ಪೂಹ, ಏನಾಮ್, ಯರ್ಮೂತ್,36ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.37ಚೆನಾನ್, ಹದಾಷಾ, ಮಿಗ್ದಲ್ಗಾದ್,38ದಿಲಾನ್, ಮಿಚ್ಪೆ, ಯೊಕ್ತೇಲ್,39ಲಾಕೀಷ್, ಬೊಚ್ಕತ್, ಎಗ್ಲೋನ್,40ಕಬ್ಬೋನ್, ಲಹ್ಮಾಸ್, ಕಿತ್ಲೀಷ್, ಗೆದೇರೋತ್, ಬೇತ್‌ದಾಗೋನ್, ನಾಮಾ,41ಮಕ್ಕೇದಾ, ಎಂಬ ಹದಿನಾರು ಪಟ್ಟಣಗಳೂ, ಅವುಗಳ ಗ್ರಾಮಗಳು.42ಲಿಬ್ನಾ, ಎತೆರ್, ಆಷಾನ್,43ಇಪ್ತಾಹ,44ಅಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ, ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.45ಎಕ್ರೋನ್ ಸಂಸ್ಥಾನವೂ ಅದಕ್ಕೆ ಸೇರಿದ ಗ್ರಾಮ ಪಟ್ಟಣಗಳು.46ಎಕ್ರೋನಿನಿಂದ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳು;47ಮತ್ತು ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ ಪಟ್ಟಣಗಳು; ಗಾಜಾ ಸಂಸ್ಥಾನ ಹಾಗೂ ಐಗುಪ್ತ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ, ಪಟ್ಟಣಗಳು.48ಬೆಟ್ಟದ ಮೇಲಿನ ಪ್ರದೇಶದಲ್ಲಿರುವ ಶಾಮೀರ್, ಯತ್ತೀರ್, ಸೋಕೋ,49ದನ್ನಾ, ದೆಬೀರ್, ಎಂಬ ಕಿರ್ಯತ್ ಸನ್ನಾ,50ಅನಾಬ್, ಎಷ್ಟೆಮೋ, ಅನೀಮ್,51ಗೋಷೆನ್, ಹೋಲೋನ್, ಗಿಲೋ ಎಂಬ ಹನ್ನೊಂದು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.52ಅರಬ್, ದೂಮಾ, ಎಷಾನ್,53ಯಾನೂಮ್, ಬೇತ್ ತಪ್ಪೂಹ, ಅಫೇಕಾ,54ಹುಮ್ಟಾ, ಹೆಬ್ರೋನೆಂಬ ಕಿರ್ಯತ್‌ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳು.55ಮಾವೋನ್,56ಕರ್ಮೆಲ್, ಜೀಫ್, ಯುಟ್ಟಾ,57ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.58ಹಲ್ಹೂಲ್, ಬೇತ್‌ಚೂರ್, ಗೆದೋರ್,59ಮಾರಾತ್, ಬೇತನೋತ್, ಎಲ್ಟೆಕೋನ್ ಎಂಬ ಆರು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.60ಕಿರ್ಯಾತ್ಯಾರೀಮ್ ಅನಿಸಿಕೊಳ್ಳುವ ಕಿರ್ಯಾತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳು ಗ್ರಾಮಗಳು.61ಅರಣ್ಯದಲ್ಲಿರುವ ಬೇತ್ ಆರಾಬಾ, ಮಿದ್ದೀನ್, ಸೆಕಾಕಾ,62ನಿಬ್ಷಾನ್, ಉಪ್ಪಿನ ಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು.63ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಯೆರೂಸಲೇಮಿನಲ್ಲೇ ವಾಸವಾಗಿದ್ದಾರೆ.
16ಎಫ್ರಾಯೀಮ್, ಮನಸ್ಸೆ ಕುಲಗಳ ಸ್ವತ್ತು
1ಯೋಸೇಫನ ವಂಶದವರಿಗೆ ದೊರಕಿದ ಸ್ವತ್ತಿನ ಮೇರೆಯು: ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ಯೆರಿಕೋವಿನ ಪೂರ್ವದಲ್ಲಿದ್ದ ನದಿ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ ಹಾಗೂ2ಬೇತೇಲ್ ಇವುಗಳ ಮೇಲೆ ಲೂಜಿಗೂ ಹೋಗುತ್ತದೆ. ಅಲ್ಲಿಂದ ಅರ್ಕಿಯರ ಮೇರೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ3ಅಲ್ಲಿಂದ ಇಳಿದು ಪಶ್ಚಿಮ ದಿಕ್ಕಿನಲ್ಲಿರುವ ಯಫ್ಲೇಟ್ಯರ ಪ್ರಾಂತ್ಯವನ್ನು ಮುಟ್ಟಿ ಕೆಳಗಿನ ಬೇತ್ ಹೋರೋನ್ ಮೇಲೆ ಗೆಜೆರಿಗೆ ಹೋಗಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.4ಇದು ಯೋಸೇಫನ ಮಕ್ಕಳಾದ ಮನಸ್ಸೆ, ಎಫ್ರಾಯೀಮ್ ಎಂಬ ಕುಲಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು.ಎಫ್ರಾಯೀಮ್ ಕುಲದ ಸ್ವಾಸ್ತ್ಯ
5ಎಫ್ರಾಯೀಮ್ ಗೋತ್ರಗಳ ದೇಶದ ದಕ್ಷಿಣ ದಿಕ್ಕಿನ ಮೇರೆಯು ಅಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ಬೇತ್ ಹೋರೋನಿನ ಮೇಲೆ ಸಮುದ್ರತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.6ಅದರ ಉತ್ತರ ದಿಕ್ಕಿನ ಮೇರೆಯು ಮಿಕ್ಮೆತಾತ್ ಯಿಂದ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ.7ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಯೆರಿಕೋ ಪ್ರಾಂತ್ಯಕ್ಕೆ ಬಂದು ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.8ಅದರ ಮೇರೆಯು ತಪ್ಪೂಹದಿಂದ ಪಶ್ಚಿಮದ ಕಡೆಗೆ ಹೋಗುವ ಕಾನಾ ಹಳ್ಳವನ್ನು ಅನುಸರಿಸಿ ಸಮುದ್ರತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಎಫ್ರಾಯೀಮ್ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವುಗಳೇ.9ಇದಲ್ಲದೆ ಎಫ್ರಾಯೀಮ್ ಕುಲದವರ ಮತ್ತು ಮನಸ್ಸೆ ಕುಲದವರ ಮಧ್ಯದಲ್ಲಿ ಪ್ರತ್ಯೇಕವಾದ ಕೆಲವು ಪಟ್ಟಣಗಳು ಅವುಗಳಿಗೆ ಸೇರಿದ ಗ್ರಾಮಗಳು ದೊರಕಿದವು.10ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಸೇವೆ ಮಾಡುತ್ತಿದ್ದಾರೆ.
17ಮನಸ್ಸೆ ಕುಲದ ಸ್ವಾಸ್ತ್ಯ
1ಯೋಸೇಫನ ಚೊಚ್ಚಲ ಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವತ್ತಿನ ವಿವರ: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾಗಿದ್ದನು. ಆದ್ದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಸಿಕ್ಕಿದವು.2ಯೋಸೇಫನ ಮಗನಾಗಿರುವ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶೆಮೀದಾ ಎಂಬುವವರ ವಂಶದವರಿಗೆ ಯೊರ್ದನಿನ ಈಚೆಯಲ್ಲಿ ಸ್ವತ್ತು ಸಿಕ್ಕಿತು.3ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳ ಹೊರತು ಗಂಡು ಮಕ್ಕಳು ಇರಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಅವನ ಹೆಣ್ಣು ಮಕ್ಕಳು.4ಇವರು ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ, ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, <<ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನಲ್ಲಾ?>> ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸ್ವತ್ತನ್ನು ಕೊಟ್ಟನು.5ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡು ಮಕ್ಕಳ ಸಹಿತವಾಗಿ ಸ್ವಾಸ್ತ್ಯ ದೊರಕಿದ್ದರಿಂದ ಮನಸ್ಸೆಯವರಿಗೆ ಯೊರ್ದನಿನ ಆಚೆಯಲ್ಲಿ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು.6ಗಿಲ್ಯಾದ್ ಸೀಮೆಯು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು.7ಮನಸ್ಸೆಯವರ ಸ್ವತ್ತಿನ ಮೇರೆಯು ಆಶೇರ್ ಊರಿನಿಂದ ಶೆಕೆಮಿನ ಪೂರ್ವದಲ್ಲಿರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.8ತಪ್ಪೂಹ ಪಟ್ಟಣಕ್ಕೆ ಸೇರುವ ಭೂಮಿಯು ಮನಸ್ಸೆಯವರದು; ಆದರೆ ಅವರ ಮೇರೆಗೆ ಹೊಂದಿರುವ ತಪ್ಪೂಹ ಪಟ್ಟಣವು ಎಫ್ರಾಯೀಮ್ಯರದು;9ಅಲ್ಲಿಂದ ಅವರ ಮೇರೆಯು ಇಳಿಯುತ್ತಾ ಕಾನಾ ಹಳ್ಳದ ದಕ್ಷಿಣಕ್ಕೆ ಹೋಗುತ್ತದೆ. ಅಲ್ಲಿ ಮನಸ್ಸೆಯವರಿಗೆ ಇರುವಂತೆ ಎಫ್ರಾಯೀಮ್ಯರಿಗೂ ಕೆಲವು ಪಟ್ಟಣಗಳಿರುತ್ತವೆ. ಮನಸ್ಸೆಯವರ ಮುಂದಿನ ಮೇರೆಯು ಹಳ್ಳದ ಉತ್ತರ ತೀರವನ್ನು ಅನುಸರಿಸಿ ಹೋಗಿ ಸಮುದ್ರದ ದಡದಲ್ಲಿ ಮುಕ್ತಾಯಗೊಳ್ಳುತ್ತದೆ.10ಆ ಹಳ್ಳದ ದಕ್ಷಿಣ ತೀರವು ಎಫ್ರಾಯೀಮ್ಯರದು; ಉತ್ತರ ತೀರವು ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಮೇರೆಯು. ಉತ್ತರಕ್ಕೆ ಆಶೇರ್ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ದೇಶವೂ ಇರುತ್ತದೆ.11ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಲೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು.12ಆದರೆ ಮನಸ್ಸೆಯವರು ಆ ಪಟ್ಟಣಗಳ ನಿವಾಸಿಗಳನ್ನು ಹೊರದೂಡಲಿಲ್ಲ. ಕಾನಾನ್ಯರಿಗೆ ಅಲ್ಲಿ ವಾಸಿಸುವುದಕ್ಕೆ ಅನುಕೂಲವಾಯಿತು.13ಇಸ್ರಾಯೇಲ್ಯರು ಬಲಗೊಂಡ ಮೇಲೆ ಕಾನಾನ್ಯರನ್ನು ಹೊರಡಿಸದೇ ಅವರನ್ನು ದಾಸತ್ವಕ್ಕೆ ಹಚ್ಚಿದರು.ಹೆಚ್ಚಿನ ಭೂಮಿಗಾಗಿ ಎಫ್ರಾಯೀಮ್ ಮತ್ತು ಮನಸ್ಸೆಯವರ ಕೋರಿಕೆ
14ಆದರೆ ಯೋಸೇಫನ ಸಂತಾನದವರು ಯೆಹೋಶುವನಿಗೆ, <<ನೀನು ಚೀಟು ಹಾಕಿ, ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿರುವುದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ?>> ಎಂದು ಹೇಳಲು15ಯೆಹೋಶುವನು ಅವರಿಗೆ, <<ಮಹಾಜನಾಂಗವಾದ ನಿಮಗೆ ಎಫ್ರಾಯೀಮ್ ಬೆಟ್ಟದ ಸೀಮೆ ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ಸೀಮೆಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳಮಾಡಿಕೊಳ್ಳಿ>> ಎಂದನು.16ಅವರು ತಿರುಗಿ ಯೆಹೋಶುವನಿಗೆ, <<ನಮ್ಮ ಪರ್ವತ ಪ್ರದೇಶವು ನಮಗೆ ಸಾಲುವುದಿಲ್ಲ. ಬೇತಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರೂ ಕಬ್ಬಿಣದ ರಥವುಳ್ಳವರು>> ಎಂದರು17ಯೆಹೋಶುವನು ಯೋಸೇಫರಾದ ಎಫ್ರಾಯೀಮ್ ಹಾಗೂ ಮನಸ್ಸೆ ಕುಲಗಳ ಜನರಿಗೆ, <<ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವುದು ನಿಜ. ನೀವು ಒಂದು ಭಾಗಕ್ಕಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ.18ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದುಹಾಕಬಹುದು. ಅದಕ್ಕೆ ಸೇರಿರುವ ಬಯಲು ಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರದೂಡುವಿರಿ>> ಎಂದು ಉತ್ತರ ಕೊಟ್ಟನು.
18ಉಳಿದ ಪ್ರದೇಶಗಳ ಪಟ್ಟಿಯನ್ನು ಮಾಡಿದ್ದು
1ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.2ಇಸ್ರಾಯೇಲ್ಯರಲ್ಲಿ ಇನ್ನೂ ಏಳು ಕುಲದವರಿಗೆ ಪಾಲು ಸಿಕ್ಕಿರಲಿಲ್ಲ.3ಆಗ ಯೆಹೋಶುವನು ಇಸ್ರಾಯೇಲ್ಯರಿಗೆ <<ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದರಲ್ಲಿ ಇನ್ನೆಷ್ಟು ತಡಮಾಡುತ್ತೀರಿ?4ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.5ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವತ್ತು ಸಿಕ್ಕುತ್ತದೆ. ಅದು ಅವರಿಗೇ ಇರಲಿ.6ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಬೇಕು. ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟು ಹಾಕುವೆನು.7ಲೇವಿಯರಿಗೆ ನಿಮ್ಮ ಸಂಗಡ ಪಾಲು ಇರುವುದಿಲ್ಲ. ಯೆಹೋವನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸ್ವತ್ತಾಗಿದೆ. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧ ಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದಲೇ ಸ್ವತ್ತು ಸಿಕ್ಕಿದೆ,>> ಎಂದನು8ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವುದಕ್ಕಿಂತ ಮೊದಲು ಯೆಹೋಶುವನು ಅವರಿಗೆ, <<ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿನಲ್ಲಿರುವ ನನ್ನ ಬಳಿಗೆ ಬನ್ನಿರಿ. ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟು ಹಾಕುವೆನು>> ಎಂದು ಹೇಳಿ ಕಳುಹಿಸಿದನು.9ಆ ಜನರು ಹೊರಟು ದೇಶದಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಅದರ ಗ್ರಾಮ ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂತಿರುಗಿ ಬಂದರು.10ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟು ಹಾಕಿ ದೇಶವನ್ನು ಅವರ ಕುಲಗಳಿಗೆ ಹಂಚಿಕೊಟ್ಟನು.ಬೆನ್ಯಾಮೀನ್ಯರ ಸ್ವತ್ತು
11ಚೀಟು ಮೊದಲು ಬೆನ್ಯಾಮೀನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಯೆಹೂದ್ಯರ ಮತ್ತು ಯೋಸೇಫರ ಪ್ರಾಂತ್ಯಗಳ ಮಧ್ಯದಲ್ಲಿರುತ್ತದೆ.12ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ನದಿಯಿಂದ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.13ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಎನ್ನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗುತ್ತದೆ.14ಅದರ ಮೇರೆಯ ಪಶ್ಚಿಮದ ಮೂಲೆಯಾಗಿರುವ ಈ ಬೆಟ್ಟದಿಂದ ಅದು ದಕ್ಷಿಣಕ್ಕೆ ತಿರುಗಿಕೊಂಡು ಕಿರ್ಯಾತ್ ಬಾಳ್ ಎನ್ನಿಸಿಕೊಳ್ಳುತ್ತಿದ್ದ ಯೆಹೂದ್ಯರ ಕಿರ್ಯಾತ್ಯಾರೀಮ್ ಎಂಬ ಪಟ್ಟಣದಲ್ಲಿ ಕೊನೆಗೊಳ್ಳುತ್ತದೆ. ಇದೇ ಅವರ ಪಡುವಣ ಮೇರೆ.15ದಕ್ಷಿಣ ದಿಕ್ಕಿನ ಮೇರೆಯು ಪಡುವಣ ಮೂಲೆಯಾಗಿರುವ ಕಿರ್ಯಾತ್ಯಾರೀಮಿನ ಪ್ರಾಂತ್ಯದಿಂದ16ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ಕಣಿವೆಯ ಈಚೆಗೂ ರೆಫಾಯೀಮ್ ಕಣಿವೆಯ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್ ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನರೋಗೆಲಿಗೆ ಬರುತ್ತದೆ.17ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಇಳಿಯುತ್ತಾ ಏನ್ ಷೆಮೆಷಿಗೂ, ಅದುಮೀಮಿನ ದಾರಿಯ ಎದುರಿನಲ್ಲಿರುವ ಗೆಲೀಲೋತಕ್ಕೆ ತಲುಪಿ ರೂಬೇನನ ಮಗನಾದ ಬೋಹನನ ಬಂಡೆಯ ತನಕ ಇಳಿದು,18ಅರಾಬದ ಉತ್ತರದಲ್ಲಿರುವ ಬೆಟ್ಟ ಇವುಗಳ ಮೇಲೆ ಅರಾಬಾ ಎಂಬ ಕಣಿವೆ ಪ್ರದೇಶಕ್ಕೆ ಹೋಗುತ್ತದೆ.19ಅಲ್ಲಿಂದ ಮೇರೆಯು ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಬಡಗಣ ಮೂಲೆಗೆ ಹೋಗಿ ಯೊರ್ದನ್ ನದಿಯು ಸಮುದ್ರಕ್ಕೆ ಬಂದು ಸೇರುವ ಸ್ಥಳದಲ್ಲಿ ಕೊನೆಗೊಳ್ಳುತ್ತದೆ. ಇದೇ ದಕ್ಷಿಣ ದಿಕ್ಕಿನ ಮೇರೆಯು.20ಯೊರ್ದನ್ ನದಿಯೇ ಅವರ ಪೂರ್ವ ದಿಕ್ಕಿನ ಮೇರೆಯು.21ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,22ಬೇತ್ ಅರಾಬಾ, ಚೆಮಾರಯಿಮ್, ಬೇತೇಲ್,23ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ,24ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು;25ಗಿಬ್ಯೋನ್, ರಾಮಾ, ಬೇರೋತ್,26ಮಿಚ್ಪೆ, ಕೆಫೀರಾ, ಮೋಚಾ,27ರೆಕೆಮ್, ಇರ್ಪೇಲ್, ತರಲಾ,28ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ವತ್ತು ಇವೇ.
19ಸಿಮೆಯೋನ್ ಕುಲದವರ ಸ್ವಾಸ್ತ್ಯ
1ಚೀಟು ಎರಡನೆಯ ಸಾರಿ ಸಿಮೆಯೋನನ ಕುಲದವರಿಗೆ ಬಿದ್ದಿತು. ಸಿಮೆಯೋನನ ಕುಲದ ಗೋತ್ರಗಳ ಸ್ವತ್ತು ಯೆಹೂದ ಕುಲದವರ ಸ್ವತ್ತಿನ ಮಧ್ಯದಲ್ಲಿತ್ತು.2ಅವರ ಊರುಗಳು ಯಾವುವೆಂದರೆ: ಬೇರ್ಷೆಬ, ಶೆಬ, ಮೋಲಾದಾ,3ಹಚರ್ ಷೂವಾಲ್, ಬಾಲಾ, ಎಚೆಮ್,4ಎಲ್ತೋಲದ್, ಬೆತೂಲ್, ಹೊರ್ಮಾ,5ಚಿಕ್ಲಗ್, ಬೇತ್‌ಮರ್ಕಾಬೋತ್, ಹಚರ್‌ಸೂಸಾ,6ಬೇತ್‌ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.7ಅಯಿನ್, ರಿಮ್ಮೋನ್, ಏತೆರ್, ಅಷಾನ್ ಎಂಬ ನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.8ಅವುಗಳ ಸುತ್ತಣ ಪ್ರದೇಶದಲ್ಲಿ ರಾಮ ಎಂಬ ಬಾಲತ್ ಬೇರ್ ಎಂಬ ಊರಿನವರೆಗೂ ಇದ್ದ ಎಲ್ಲಾ ಗ್ರಾಮಗಳೂ ಆಗಿವೆ.ಬಾಲತ್ ಬೇರ್ ಎಂಬುದು ದಕ್ಷಿಣ ರಾಮ ಎನ್ನಿಸಿಕೊಳ್ಳುತ್ತದೆ. ಸಿಮೆಯೋನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವೇ.
9ಸಿಮೆಯೋನ್ಯರ ಈ ಸ್ವತ್ತು ಯೆಹೂದ್ಯರ ಸ್ವತ್ತಿನ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲು ಸಿಕ್ಕಿತು.10ಚೀಟು ಮೂರನೆಯ ಸಾರಿ ಜೆಬುಲೂನ್ಯರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು11ಸಾರೀದಿನಿಂದ ಪಶ್ಚಿಮ ದಿಕ್ಕಿನಲ್ಲಿರುವ ಮರ್ಗಲಾ, ದಬ್ಬೆಷೆತ್ ಇವುಗಳ ಮೇಲೆ ಯೊಕ್ನೆಯಾಮ್ ಊರಿನ ಈಚೆಯಲ್ಲಿರುವ ಹಳ್ಳಕ್ಕೆ ಹೋಗುತ್ತದೆ.12ಅದೇ ಸಾರೀದಿನಿಂದ ಅದು ಪೂರ್ವ ದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.13ಅಲ್ಲಿಂದ ಮತ್ತು ಪೂರ್ವಕ್ಕೆ ಮುಂದುವರೆದು ಗತ್‌ಹೇಫೆರನ್ನು ಎತ್‌ಕಾಚೀನ ಇವುಗಳ ಮೇಲೆ ಹಾದು ನೇಯದ ಪಕ್ಕದಲ್ಲಿ ಇರುವ ರಿಮ್ಮೋನಿಗೆ ಹೋಗುತ್ತದೆ.14ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ಕಣಿವೆಗೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.15ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳಿಗೆ ಸೇರಿದ ಗ್ರಾಮಗಳು.16ಜೆಬುಲೂನಿನ ಕುಲದ ಗೋತ್ರಗಳಿಗೆ ಸ್ವತ್ತಾಗಿ ದೊರಕಿದವು.ಇಸ್ಸಾಕಾರ್ ಕುಲದ ಸ್ವಾಸ್ತ್ಯ
17ಚೀಟು ನಾಲ್ಕನೆಯ ಸಾರಿ ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಪಟ್ಟಣಗಳು ಯಾವುವೆಂದರೆ:18ಇಜ್ರೇಲ್, ಕೆಸುಲ್ಲೋತ್, ಶೂನೇಮ್,19ಹಫಾರಯಿಮ್, ಶೀಯೋನ್, ಅನಾಹರತ್,20ರಬ್ಬೀತ್, ಕಿಷ್ಯೋನ್, ಎಬೆಜ್,21ರೆಮೆತ್, ಏಂಗನ್ನೀಮ್, ಏನ್‌ಹದ್ದಾ, ಬೇತ್ ಪಚ್ಚೇಚ್ ಇವುಗಳೇ.22ತಾಬೋರ್, ಶಹಚೀಮಾ, ಬೇತ್‌ಷೆಮೆಷ್ ಎಂಬ ಊರುಗಳು ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ನದಿಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,23ಇಸ್ಸಾಕಾರನ ಕುಲದ ಗೋತ್ರಗಳಿಗೆ ಸಿಕ್ಕಿದವು.ಆಶೇರ್ ಕುಲದವರ ಸ್ವಾಸ್ತ್ಯ
24ಚೀಟು ಐದನೆಯ ಸಾರಿ ಆಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಯಾವುವೆಂದರೆ: -25ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್,26ಅಲಮ್ಮೆಲೆಕ್, ಅಮಾದ್, ಮಿಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ, ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ ಅಲ್ಲಿಂದ ಪೂರ್ವಕ್ಕೆ ತಿರುಗಿ,27ಬೇತ್‌ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ಯರ ಮೇರೆಗೂ ಇಪ್ತಹೇಲಿನ ಕಣಿವೆಯ ಉತ್ತರ ದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತೇಮೇಕ ನೆಗೀಯೇಲ್ ಇವುಗಳ ಮೇಲೆ ಉತ್ತರಕ್ಕೆ ಮುಂದುವರೆದು28ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.29ಅಲ್ಲಿಂದ ಅದು ತಿರುಗಿಕೊಂಡು ರಾಮ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರ ತೀರದಲ್ಲಿ ಕೊನೆಗೊಳ್ಳುತ್ತದೆ.30ಉಮ್ಮಾ, ಅಫೇಕ್, ರೆಹೋಬ್ ಇವೇ ಮೊದಲಾದ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.31ಅಶೇರನ ಕುಲದ ಗೋತ್ರಗಳ ಸ್ವತ್ತಾಗಿವೆ.ನಫ್ತಾಲಿ ಕುಲದವರ ಸ್ವಾಸ್ತ್ಯ
32ಚೀಟು ಆರನೆಯ ಸಾರಿ ನಫ್ತಾಲಿಯ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು33ಚಾನನ್ನೀಮಿನಲ್ಲಿರುವ ಹೆಲೇಫಿನ ಅಲ್ಲೋನ ಮರದಿಂದ ಆದಾಮಿನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಲಕ್ಕೂಮಿಗೆ ಹೋಗಿ ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.34ಇದಲ್ಲದೆ ಮೇರೆಯು ತಿರುಗಿ ಅದೇ ಸ್ಥಳದಿಂದ ಅಜ್ನೊತ್-ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ, ದಕ್ಷಿಣದಲ್ಲಿ ಜೆಬುಲೂನ್ಯರ ಮೇರೆಗೂ, ಪಶ್ಚಿಮದಲ್ಲಿ ಆಶೇರರ ಮತ್ತು ಯೆಹೂದ್ಯರ ಮೇರೆಗೂ ಪೂರ್ವದಲ್ಲಿ ಯೊರ್ದನ್ ಹೊಳೆಗೂ ಹೊಂದಿಕೊಂಡಿರುತ್ತದೆ.35ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,36ಆದಾಮಾ, ರಾಮಾ, ಹಾಚೋರ್,37ಕೆದೆಷ್ ಎದ್ರೈ, ಏನ್ ಹಾಚೋರ್,38ಇರೋನ್, ಮಿಗ್ದಲೇಲ್, ಹೊರೇಮ್, ಬೇತ್ ಷೆಮೆಷ್, ಬೆತನಾತ್ ಇವೇ ಮೊದಲಾದ ಹತ್ತೊಂಬತ್ತು ಕೋಟೆಕೊತ್ತಲುಗಳುಳ್ಳ ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,39ನಫ್ತಾಲಿ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಾಗಿದೆ.ದಾನ್ ಕುಲದವರ ಸ್ವಾಸ್ತ್ಯ
40ಚೀಟು ಏಳನೆಯ ಸಾರಿ ದಾನನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸ್ವತ್ತಾಗಿ ದೊರಕಿದ ಊರುಗಳು ಯಾವುವೆಂದರೆ:41ಚೊರ್ಗಾ, ಎಷ್ಟಾವೋಲ್, ಈರ್ಷೆಮೆಷ್,42ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,43ಏಲೋನ್, ತಿಮ್ನಾ ಎಕ್ರೋನ್,44ಎಲ್ತೆಕೇ, ಗಿಬ್ಬೆತೋನ್, ಬಾಲತ್,45ಯೆಹುದ್, ಬೆನೇಬೆರಕ್, ಗತ್ ರಿಮ್ಮೋನ್,46ಮೇಯರ್ಕೋನ್, ರಕ್ಕೋನ್ ಇವೇ. ಯೊಪ್ಪಕ್ಕೆ ಹೊಂದಿರುವ ಪ್ರದೇಶವೂ ಇವರಿಗೇ ದೊರಕಿತು.47ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿ ಆ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸಿಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರಿಟ್ಟರು.48ದಾನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಅದರಲ್ಲಿದ್ದ ಗ್ರಾಮ ಮತ್ತು ನಗರಗಳು ಇವೇ.ಯೆಹೋಶುವನ ಸ್ವಾಸ್ತ್ಯ
49ಇಸ್ರಾಯೇಲ್ಯರು ದೇಶವನ್ನು ಮೇರೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗನಾದ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು.50ಅವನು ತನಗೋಸ್ಕರ ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ತಿಮ್ನತ್ ಸೆರಹ ಎಂಬ ಪಟ್ಟಣವನ್ನು ಕೇಳಿಕೊಳ್ಳಲು ಅವರು ಯೆಹೋವನ ಆಜ್ಞೆಯಂತೆ ಅದನ್ನು ಅವನಿಗೆ ಕೊಟ್ಟು ಬಿಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿಕೊಂಡು ಅದರಲ್ಲೇ ವಾಸವಾಗಿದ್ದನು.51ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ, ಇಸ್ರಾಯೇಲ್ಯರ ಕುಲಮುಖ್ಯಸ್ಥರೂ ಸೇರಿ ಇಸ್ರಾಯೇಲ್ಯರಿಗೆ ಶೀಲೋವಿನಲ್ಲಿದ್ದ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟು ಹಾಕಿ ಹಂಚಿಕೊಟ್ಟ ಪ್ರಾಂತ್ಯಗಳು ಇವೇ. ಹೀಗೆ ದೇಶ ವಿಭಜನೆಯ ಕಾರ್ಯವು ಪೂರ್ಣಗೊಂಡಿತು.
20ಆಶ್ರಯ ನಗರಗಳನ್ನು ನೇಮಿಸಿದ್ದು
1ಯೆಹೋವನು ಯೆಹೋಶುವನನ್ನು ಕುರಿತು,2<<ನೀನು ಇಸ್ರಾಯೇಲರಿಗೆ <ನಾನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ನೀವು ನಿಮಗೋಸ್ಕರ ಕೆಲವು ಆಶ್ರಯ ನಗರಗಳನ್ನು ಗೊತ್ತು ಮಾಡಿಕೊಳ್ಳಿರಿ;3ನಿಮ್ಮಲ್ಲಿ ತಿಳಿಯದೆ ಆಕಸ್ಮಾತ್ತಾಗಿ ನರಹತ್ಯಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪ ಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗಿರಲಿ.4ಅಂಥ ಪಟ್ಟಣಕ್ಕೆ ಓಡಿ ಹೋದವನು ಮೊದಲು ಊರ ಬಾಗಿಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಕ್ಕೆ ಸೇರಿಸಿಕೊಂಡು, ಅವನ ವಾಸಕ್ಕೆ ಸ್ಥಳ ಕೊಡಲಿ5ಹತವಾದವನ ಸಮೀಪ ಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಹಳೆಯ ದ್ವೇಷವೇನೂ ಇಲ್ಲದೆ ಆಕಸ್ಮಾತ್ತಾಗಿ ಕೊಂದನು.6ಒಂದು ಸಭೆಯನ್ನು ಸೇರಿಸಿ ಅಂಥವನನ್ನು ವಿಚಾರಿಸಬೇಕು; ಮತ್ತು ಅವನು ಆಗಿನ ಮಹಾಯಾಜಕನ ಜೀವಮಾನವೆಲ್ಲಾ ಅದೇ ಪಟ್ಟಣದಲ್ಲಿ ಇರಬೇಕು. ಆ ನಂತರ ತಾನು ಬಿಟ್ಟು ಬಂದ ಪಟ್ಟಣದಲ್ಲಿರುವ ಮನೆಗೆ ಹಿಂತಿರುಗಿ ಹೋಗಬಹುದು> ಎಂದು ಹೇಳು>> ಎಂದನು.7ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.8ಇವುಗಳನ್ನು ಮಾತ್ರವಲ್ಲದೆ, ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನು ನೇಮಿಸಿದನು.9ಇಸ್ರಾಯೇಲ್ಯರೆಲ್ಲರಿಗೂ ಹಾಗೂ ಅವರ ಮಧ್ಯದಲ್ಲಿ ವಾಸಮಾಡುತ್ತಿದ್ದ ಪರದೇಶಿಗಳಿಗೂ ಇವು ಆಶ್ರಯ ನಗರಗಳಾಗಿ ನೇಮಕ ಆಗಿದ್ದವು. ಬೇರೊಬ್ಬನನ್ನು ಆಕಸ್ಮಾತ್ತಾಗಿ ಕೊಂದವನು ಓಡಿಹೋಗಿ ಹತನಾದವನ ಹತ್ತಿರದ ಬಂಧುವಿನಿಂದ ತಲೆ ತಪ್ಪಿಸಿ ಕೊಳ್ಳಬಹುದು. ಅಲ್ಲದೆ ತಾನು ನ್ಯಾಯ ಸಭೆಯ ಮುಂದೆ ನಿಲ್ಲುವವರೆಗೆ ಅಲ್ಲೇ ಇರಬಹುದಾಗಿದೆ.
21ಲೇವಿ ಕುಲದವರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು
1ಲೇವಿ ಕುಲಾಧಿಪತಿಗಳು ಕಾನಾನ್ ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ ಮತ್ತು ಇಸ್ರಾಯೇಲ ಕುಲಾಧಿಪತಿಗಳು ಇವರ ಬಳಿಗೆ ಬಂದು,2<<ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲವೆ?>> ಅನ್ನಲು3ಅವರು ಯೆಹೋವನ ಆಜ್ಞೆಯಂತೆ ತಮ್ಮ ಸ್ವತ್ತಿನಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಅವರಿಗೆ ಕೊಟ್ಟರು.4ಕೆಹಾತ್ಯರಿಗೋಸ್ಕರ ಚೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರೆತವು.5ಉಳಿದ ಕೆಹಾತ್ಯರಿಗೆ ಎಫ್ರಾಯೀಮ್ ದಾನ್ ಕುಲಗಳಿಂದ ಮನಸ್ಸೆಯ ಅರ್ಧಕುಲದಿಂದಲೂ ಹತ್ತು ಪಟ್ಟಣಗಳು ಸಿಕ್ಕಿದವು.6ಪುನಃ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು.7ಮೆರಾರೀ ಗೋತ್ರದವರಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳಿಂದ ಹನ್ನೆರಡು ಪಟ್ಟಣಗಳು ಸಿಕ್ಕಿದವು8ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಇಸ್ರಾಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ಪಟ್ಟಣಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.9ಲೇವಿ ಕುಲದವರು ಕೆಹಾತ್ಯರ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಮೊದಲು ಚೀಟು ಬಿದ್ದಿತು.10ಆದ್ದರಿಂದ ಇಸ್ರಾಯೇಲ್ಯರು ಅವರಿಗೆ ಯೆಹೂದ ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ಪಟ್ಟಣಗಳನ್ನು ಕೊಟ್ಟರು.11ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು.12ಆದರೆ ಇದರ ಹೊಲಗಳನ್ನೂ, ಇದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.13ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನೆಂಬ ಆಶ್ರಯ ನಗರವಾದ ಲಿಬ್ನಾ,14ಯತ್ತೀರ್, ಎಷ್ಟೆಮೋಹ,15ಹೋಲೋನ್, ದೆಬೀರ್,16ಅಯಿನ್, ಯುಟ್ಟಾ, ಬೇತ್‌ಷೆಮೆಷ್ ಎಂಬ ಒಂಭತ್ತು ಗೋಮಾಳ ಸಹಿತವಾದ ಪಟ್ಟಣಗಳು17ಹಾಗೂ ಬೆನ್ಯಾಮೀನನ ಕುಲದಿಂದ ಗಿಬ್ಯೋನ್, ಗೆಬ,18ಅನಾತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳೂ ದೊರಕಿದವು.19ಮಹಾಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.20ಲೇವಿಯರಾದ ಕೆಹಾತ್ಯರ ಉಳಿದ ಕುಟುಂಬಗಳಿಗೆ21ಎಫ್ರಾಯೀಮ್ಯರ ಸ್ವತ್ತಿನಿಂದ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ,22ಗೆಜೆರ್, ಕಿಬ್ಚೈಮ್ ಹಾಗೂ ಬೇತ್‌ಹೋರೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,23ದಾನ್ಯರ ಸ್ವತ್ತಿನಿಂದ ಎಲ್ತೆಕೇ, ಗಿಬ್ಬೆತೋನ್,24ಅಯ್ಯಾಲೋನ್, ಗತ್ರಿಮ್ಮೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,25ಮನಸ್ಸೆ ಕುಲದ ಅರ್ಧಜನರ ಸ್ವತ್ತಿನಿಂದ ತಾನಾಕ್, ಗತ್‌ರಿಮ್ಮೋನ್, ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು.26ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ಪಟ್ಟಣಗಳು ಹತ್ತು.27ಗೆರ್ಷೋನ್ಯರ ಕುಟುಂಬಗಳಿಗೆ ಅರ್ಧ ಮನಸ್ಸೆಯವರ ಸ್ವತ್ತಿನಿಂದ ದೊರಕಿದ ಪಟ್ಟಣಗಳು ಇವು: ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳು;28ಇಸ್ಸಾಕಾರ್ ಸ್ವತ್ತಿನಿಂದ ಕಿಷ್ಯೋನ್, ದಾಬೆರತ್,29ಯರ್ಮೂತ್, ಏಂಗನ್ನೀಮ್, ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;30ಆಶೇರ್ ಕುಲದಿಂದ ಮಿಷಾಲ್, ಅಬ್ದೋನ್,31ಹೆಲ್ಕಾತ್ ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;32ನಫ್ತಾಲಿ ಸ್ವತ್ತಿನಿಂದ, ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಗಲಿಲಾಯದ ಕೆದೆಷ್ ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ಪಟ್ಟಣಗಳು ದೊರಕಿದವು.33ಗೇರ್ಷೊನ್ಯರಿಗೆ ಸಿಕ್ಕಿದ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.34ಮಿಕ್ಕ ಲೇವಿಯರಾದ ಮೆರಾರೀ ಗೋತ್ರದವರಿಗೆ ಜೆಬುಲೂನ್ ಸ್ವತ್ತಿನಿಂದ ಯೊಕ್ನೆಯಾಮ್,35ಕರ್ತಾ, ದಿಮ್ನಾ ಹಾಗೂ ನಹಲಾಲ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು.36ರೂಬೇನ್ಯರ ಸ್ವತ್ತಿನಿಂದ ಬೆಚೆರ್, ಯಹಚಾ,37ಕೆದೇಮೋತ್ ಹಾಗೂ ಮೇಫಾಗತ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು;38ಗಾದ್ಯರ ಸ್ವತ್ತಿನಿಂದ ಕೊಲೆ ಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,39ಹೆಷ್ಬೋನ್, ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು ದೊರಕಿದವು.40ಮಿಕ್ಕ ಲೇವಿಯರಾದ ಮೆರಾರೀ ಗೋತ್ರಗಳಿಗೆ ಚೀಟಿಯಿಂದ ದೊರಕಿದ ಪಟ್ಟಣಗಳು ಒಟ್ಟು ಹನ್ನೆರಡು.41ಲೇವಿಯರಿಗೆ ಇಸ್ರಾಯೇಲರ ಮಧ್ಯದಲ್ಲಿ ದೊರಕಿದ ಗೋಮಾಳ ಸಹಿತವಾದ ಪಟ್ಟಣಗಳು ನಲವತ್ತೆಂಟು.42ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಗೋಮಾಳಗಳಿದ್ದವು. ಎಲ್ಲಾ ಪಟ್ಟಣಗಳಿಗೂ ಹೀಗೆಯೇ ಇದ್ದಿತು.43ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.44ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.45ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು.
22ಮೂಡಣ ಕುಲದವರು ತಮ್ಮ ಸ್ವತ್ತುಗಳಿಗೆ ಹಿಂದಿರುಗಿ ಹೋದದ್ದು
1ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಕುಲದ ಅರ್ಧ ಜನರನ್ನು ಕರೆಸಿ ಅವರಿಗೆ,2<<ನೀವು ಯೆಹೋವನ ಸೇವಕನಾದ ಮೋಶೆಯ ಆಜ್ಞೆಗಳೆಲ್ಲವನ್ನು ಕೈಕೊಂಡಿದ್ದೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ್ದೀರಿ.3ಈ ಕಾಲದಲ್ಲೆಲ್ಲಾ ನೀವು ನಿಮ್ಮ ಸಹೋದರರಿಂದ ಬೇರ್ಪಡದೆ ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾ ಬಂದಿದ್ದೀರಿ.4ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.5ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,>> ಎಂದು ಹೇಳಿ6ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು.7ಮೋಶೆಯು ಮನಸ್ಸೆ ಕುಲದ ಅರ್ಧ ಜನರಿಗೆ ಬಾಷಾನಿನಲ್ಲಿ ಸ್ವತ್ತನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಯೊರ್ದನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳುಹಿಸುವಾಗ8ಅವರನ್ನು ಆಶೀರ್ವದಿಸಿ <<ನೀವು ಬಹಳ ಸಮೃದ್ಧಿಯುಳ್ಳವರಾಗಿ ದನಕುರಿ, ಬೆಳ್ಳಿಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ, ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮನಿಮ್ಮ ನಿವಾಸಗಳಿಗೆ ಹೋಗಿರಿ. ನಿಮ್ಮ ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲು ಕೊಡಿರಿ>> ಎಂದನು9ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವತ್ತಾದ ಗಿಲ್ಯಾದ್ ದೇಶಕ್ಕೆ ಹೊರಟು ಹೋದರು.ಯೊರ್ದನಿನ ಆಚೆಯ ಪ್ರದೇಶಕ್ಕೆ ಹಿಂದಿರುಗಿ ಹೋದವರು ದಾರಿಯಲ್ಲಿ ಯಜ್ಞವೇದಿಯನ್ನು ಕಟ್ಟಿದ್ದು
10ರೂಬೇನ್ಯರೂ ಗಾದ್ಯರೂ ಹಾಗೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದಲ್ಲಿರುವ ಯೊರ್ದನಿನ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ದೊಡ್ಡ ಯಜ್ಞವೇದಿಯನ್ನು ಕಟ್ಟಿದರು.11ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಜನರು ಇಸ್ರಾಯೇಲ ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್ ನದಿಯ ತೀರಪ್ರದೇಶದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ಮಿಕ್ಕ ಇಸ್ರಾಯೇಲರಿಗೂ ತಿಳಿದಾಗ,12ಅವರೆಲ್ಲರೂ ಶೀಲೋವಿನಲ್ಲಿ ಒಟ್ಟಿಗೆ ಸೇರಿ ಅವರೊಡನೆ ಹೋರಾಡಲು ಸಿದ್ಧರಾದರು.13ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಮಹಾಯಾಜಕ ಎಲಿಯಾಜರನ ಮಗನಾದ ಫೀನೆಹಾಸನನ್ನು14ಮತ್ತು ಕುಲಕ್ಕೆ ಒಬ್ಬನಂತೆ ಹತ್ತು ಮಂದಿ ನಾಯಕರನ್ನು ಕಳುಹಿಸಿದರು. ಇವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ ಕುಟುಂಬಗಳಲ್ಲಿ ಮುಖ್ಯಸ್ಥನಾಗಿದ್ದನು.15ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,16<<ಯೆಹೋವನ ಸರ್ವ ಸಭೆಯ ಮಾತನ್ನು ಕೇಳಿರಿ; ನೀವು ಇಸ್ರಾಯೇಲಿನ ದೇವರಿಗೆ ವಿರುದ್ಧವಾಗಿ ಇಂಥ ದ್ರೋಹ ಮಾಡಿದ್ದೇಕೆ? ನಿಮಗೋಸ್ಕರ ಯಜ್ಞವೇದಿಯನ್ನು ಕಟ್ಟಿಕೊಂಡದ್ದರಿಂದ ನೀವು ಯೆಹೋವನಿಗೆ ದ್ರೋಹ ಮಾಡಿದಂತಾಯಿತು; ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಂತಾಯಿತು.17ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ನಾವು ಇನ್ನೂ ಅದರಿಂದ ಪೂರ್ಣ ಶುದ್ಧರಾಗಲಿಲ್ಲ.18ಈಗ ನೀವು ಪುನಃ ಯೆಹೋವನನ್ನು ತಳ್ಳಿ ಬಿಡುತ್ತಿದ್ದೀರೋ? ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದರೆ, ನಾಳೆಯೇ ಯೆಹೋವನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯ ತೊಡಗುವುದು.19ನಿಮ್ಮ ದೇಶವು ಅಶುದ್ಧವಾಗಿದೆ ಎಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿರುವ ಸ್ವತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.20 ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ>> ಎಂದು ಹೇಳಿದನು.21ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧ ಜನರು ಇಸ್ರಾಯೇಲ್ ಕುಲಾಧಿಪತಿಗಳಿಗೆ ಹೀಗೆಂದು ಉತ್ತರಿಸಿದರು:22<<ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.23ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಈ ಯಜ್ಞವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ.24ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದ್ದೇವಷ್ಟೇ, ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, <ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ?>25ರೂಬೇನ್ಯರೇ, ಗಾದ್ಯರೇ, ಯೆಹೋವನು ನಿಮಗೂ ನಮಗೂ ನಡುವೆ ಈ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದಾನೆ. ಯೆಹೋವನಲ್ಲಿ ನಿಮಗೆ ಯಾವ ಪಾಲೂ ಇಲ್ಲ ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೈವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟೆವು.26ಈ ಕಾರಣದಿಂದಲೇ, <ಬನ್ನಿ, ಒಂದು ಯಜ್ಞವೇದಿಯನ್ನು ಕಟ್ಟೋಣ. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕಲ್ಲ,>27ಆದರೆ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವುದಕ್ಕೋಸ್ಕರ ನಮಗೂ ಹಕ್ಕಿದೆ ಎಂಬುದಕ್ಕೆ ಇದು ನಮಗೂ, ನಿಮಗೂ, ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವುದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವುದಕ್ಕೆ ಆಸ್ಪದವಿರುವುದಿಲ್ಲ.28ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ರೀತಿಯಾಗಿ ಹೇಳಿದರೆ ನಾವು ಅವರಿಗೆ <ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಲಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ> ಎಂದು ಹೇಳುವೆವು.29ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸುವುದಕ್ಕೋಸ್ಕರ ಬೇರೊಂದು ಯಜ್ಞವೇದಿಯನ್ನು ಕಟ್ಟಿ ಯೆಹೋವನಿಗೆ ವಿರುದ್ಧವಾಗಿ ದ್ರೋಹಿಗಳಾಗಿರದಂತಾಗಲಿ. ಹಾಗೆ ನಮಗೆ ಎಂದಿಗೂ ಆಗದಿರಲಿ>> ಎಂದರು.30ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳು, ರೂಬೇನ್, ಗಾದ್, ಮನಸ್ಸೆಯ ಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು.31ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ <<ನೀವು ಯೆಹೋವನಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಆತನು ನಮ್ಮ ಮಧ್ಯದಲ್ಲಿದ್ದಾನೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವನ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ>> ಎಂದನು.32ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು, ಪ್ರಭುಗಳು, ಗಿಲ್ಯಾದ್ ಸೀಮೆಯಲ್ಲಿದ್ದ ರೂಬೇನ್ಯರು, ಗಾದ್ಯರು ಇವರ ಬಳಿಯಿಂದ ಕಾನಾನ್ ದೇಶದಲ್ಲಿದ್ದ ಇಸ್ರಾಯೇಲರ ಬಳಿಗೆ ಬಂದು, ಅವರಿಗೆ ಈ ವರ್ತಮಾನವನ್ನು ತಿಳಿಸಲು33ಅವರು ಬಹು ಸಂತೋಷಪಟ್ಟು ದೇವರನ್ನು ಕೊಂಡಾಡಿ ರೂಬೇನ್ ಗಾದ್ ಕುಲಗಳೊಡನೆ ಯುದ್ಧ ಮಾಡಿ ಅವರ ದೇಶವನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ಬಿಟ್ಟರು.34ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು.
23ಯೆಹೋಶುವನ ಬೀಳ್ಕೊಡುಗೆಯ ಪ್ರಬೋಧನೆ
1ಯೆಹೋವನು ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹು ದಿನಗಳಾದ ಮೇಲೆ ಯೆಹೋಶುವನು ದಿನತುಂಬಿದ ಮುದುಕನಾದನು.2ಆತನು ಇಸ್ರಾಯೇಲ್ಯರ ಹಿರಿಯ ಪ್ರಭುಗಳು, ನ್ಯಾಯಾಧಿಪತಿಗಳು, ಅಧಿಕಾರಿಗಳು ಅಲ್ಲದೆ ಎಲ್ಲಾ ಇಸ್ರಾಯೇಲರ ಜನರನ್ನು ತನ್ನ ಬಳಿಗೆ ಕರಿಸಿ ಅವರಿಗೆ, <<ನಾನು ದಿನತುಂಬಿದ ಮುದುಕನಾಗಿದ್ದೇನೆ.3ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಜನಾಂಗಗಳಿಗೆ ಮಾಡಿದೆಲ್ಲವನ್ನೂ ನೀವೆಲ್ಲರೂ ನೋಡಿದ್ದೀರಷ್ಟೇ. ಹೌದು, ನಿಮಗಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಯೆಹೋವನೇ.4ನಾನು ಯೊರ್ದನಿನಿಂದ ಪಶ್ಚಿಮದ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವತ್ತಾಗಿ ಕೊಟ್ಟಿದ್ದೇನೆ.5ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣೆದುರಿನಲ್ಲಿ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವಂತ ಮಾಡಿಕೊಳ್ಳುವಿರಿ.6ಮೋಶೆಯ ಧರ್ಮಶಾಸ್ತ್ರವಿಧಿಗಳನ್ನೆಲ್ಲಾ ಸ್ಥಿರಚಿತ್ತದಿಂದ ಕೈಕೊಳ್ಳಿರಿ. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡಿರಿ.7ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.8ಈವರೆಗೆ ಹೇಗೊ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವನನ್ನೇ ಆತುಕೊಂಡಿರಿ.9ಯೆಹೋವನು ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ. ನಿಮ್ಮ ಮುಂದೆ ಈವರೆಗೂ ಒಬ್ಬನೂ ತಲೆಯೆತ್ತಿ ನಿಲ್ಲಲಿಲ್ಲವಲ್ಲಾ.10ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.11ಹೀಗಿರುವುದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವನನ್ನೇ ಪ್ರೀತಿಸಿರಿ.12ನೀವು ದೇವರಿಗೆ ವಿಮುಖರಾಗಿ ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳೊಡನೆ ಸೇರಿಕೊಂಡು ಅವರೊಂದಿಗೆ ಗಂಡು ಹೆಣ್ಣು ಕೊಟ್ಟು ತಂದು ಸಂಬಂಧವನ್ನಿಟ್ಟುಕೊಂಡರೆ,13ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವುದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗಿರುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣಿಗೆ ಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ನೀವು ಇಲ್ಲದಂತಾಗುವಿರಿ.14ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನು ಈಗ ಅನುಸರಿಸಬೇಕಾಗಿದೆ. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಾದದ ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿದೆ ಎಂಬುದು ನಿಮಗೆ ಮನದಟ್ಟಾಗಿದೆಯಲ್ಲ.15ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲ ವಿಧವಾದ ಕೇಡುಗಳನ್ನು ಬರಮಾಡಿ, ತಾನು ಕೊಟ್ಟಿರುವ ಈ ಉತ್ತಮ ದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು.16ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ>> ಎಂದನು.
24ಶೆಕೆಮಿನಲ್ಲಿ ಒಡಂಬಡಿಕೆಯ ನವೀಕರಣ
1ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.2ಯೆಹೋಶುವನು ಅವರಿಗೆ, <<ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.3ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿ, ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.4ಇಸಾಕನಿಗೆ ಯಾಕೋಬ, ಏಸಾವ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿ, ಏಸಾವನಿಗೆ ಸೇಯೀರ್ ಪರ್ವತವನ್ನೂ ಸ್ವತ್ತಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು.5ತರುವಾಯ ನಾನು ಮೋಶೆ, ಆರೋನರನ್ನೂ ಕಳುಹಿಸಿ, ಆ ಐಗುಪ್ತದಲ್ಲಿ ಅನೇಕ ಮಹತ್ಕಾರ್ಯಗಳನ್ನು ನಡಿಸಿ, ಅವರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆನು.6ನಿಮ್ಮ ಪೂರ್ವಿಕರು ಐಗುಪ್ತದಿಂದ ಬಿಡುಗಡೆಯಾಗಿ ಕೆಂಪು ಸಮುದ್ರಕ್ಕೆ ಬರುತ್ತಿರುವಾಗ ಐಗುಪ್ತರು ರಥಾಶ್ವಬಲಗಳ ಸಹಿತವಾಗಿ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿದರು.7ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ, ಐಗುಪ್ತರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನು ಉಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವು ಸಾಕ್ಷಿಗಳಾಗಿದ್ದಿರಿ.8ನೀವು ಬಹು ಕಾಲದವರೆಗೆ ಅರಣ್ಯದಲ್ಲಿದ್ದ ನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರೆತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ಸಂಹರಿಸಿದೆನು.9ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಾಯೇಲರಾದ ನಿಮಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೆ ಎದ್ದು ನಿಮ್ಮನ್ನು ಶಪಿಸುವುದಕ್ಕೋಸ್ಕರ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು.10ಆದರೆ ನಾನು ಬಿಳಾಮನಿಗೆ ಸಮ್ಮತಿಕೊಡಲಿಲ್ಲವಾದುದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆನು.11ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನು ನಿಮ್ಮ ಕೈಗೆ ಒಪ್ಪಿಸಿದೆನು.12ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ.13ನೀವು ವ್ಯವಸಾಯ ಮಾಡದೆ ಬೆಳೆದಿರುವ ಭೂಮಿಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟದೆ ಇರುವ ಪಟ್ಟಣಗಳಲ್ಲಿ ವಾಸಿಸುತ್ತಿದ್ದೀರಿ. ನೀವು ನೆಟ್ಟು ಬೆಳೆಸದೆ ಇರುವ ದ್ರಾಕ್ಷಿ, ಎಣ್ಣೆಮರ ಇವುಗಳ ಫಲಗಳನ್ನು ಅನುಭವಿಸುತ್ತೀದ್ದೀರಿ>>14ಹೀಗಿರುವುದರಿಂದ, <<ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.15ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು>> ಎಂದನು.16ಅದಕ್ಕೆ ಜನರು, <<ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವುದು ನಮಗೆ ದೂರವಾಗಿರಲಿ.17ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ.18ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು>> ಎಂದು ಉತ್ತರ ಕೊಟ್ಟರು.19ಆಗ ಯೆಹೋಶುವನು ಅವರಿಗೆ, <<ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.20ನೀವು ಆತನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸಿದರೆ ಆತನು ನಿಮಗೆ ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವನು>> ಎಂದನು.21ಜನರು ಯೆಹೋಶುವನಿಗೆ, <<ಇಲ್ಲ, ನಾವು ಯೆಹೋವನನ್ನೇ ಸೇವಿಸುವೆವು>> ಎಂದರು.22ಯೆಹೋಶುವನು ಅವರಿಗೆ, <<ನೀವು ಯೆಹೋವನ ಸೇವೆಯನ್ನು ಆರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು ಅನ್ನಲು ಅವರು ಹೌದು ನಾವೇ ಸಾಕ್ಷಿಗಳು>> ಎಂದರು23ಆಗ ಯೆಹೋಶುವನು ಅವರಿಗೆ, <<ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದುಹಾಕಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ>> ಎಂದನು.24ಅದಕ್ಕೆ ಜನರು, <<ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತೇವೆ. ಆತನ ಮಾತನ್ನೇ ಕೇಳುತ್ತೇವೆ>> ಎಂದರು.25ಹೀಗೆ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೆಲವು ನಿಬಂಧನೆಗಳನ್ನು ವಿಧಿಸಿದನು.26ಇದಲ್ಲದೆ, ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ,27ಎಲ್ಲಾ ಜನರಿಗೆ, <<ಇಗೋ, ಈ ಕಲ್ಲು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಯೆಹೋವನು ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿದೆ. ಆದುದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧವಾಗಿ ಸಾಕ್ಷಿಯಾಗಿರುವುದು>> ಎಂದು ಹೇಳಿ28ಅವರನ್ನು ಅವರವರ ಸ್ವತ್ತಿನ ಸ್ಥಳಗಳಿಗೆ ಕಳುಹಿಸಿದನು.ಯೆಹೋಶುವನ ಮರಣ
29ಇದಾದ ಮೇಲೆ ಯೆಹೋವನ ಸೇವಕನಾದ ನೂನನ ಮಗನಾದ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದನು.30ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುವ ತಿಮ್ನತ್‌ಸೆರಹ ಎಂಬ ಅವನ ಸ್ವತ್ತಿನಭೂಮಿಯಲ್ಲಿ ಸಮಾಧಿಮಾಡಿದರು.31ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲರಿಗೋಸ್ಕರ ನಡೆಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಆರಾಧಿಸುತ್ತಿದ್ದರು.32ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು.33ಆರೋನನ ಮಗನಾದ ಎಲಿಯಾಜರನು ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.
ನ್ಯಾಯಸ್ಥಾಪಕರು
1ಇಸ್ರಾಯೇಲ್ಯರು ಉಳಿದ ಕಾನಾನ್ಯರೊಂದಿಗೆ ಹೋರಾಡಿದ್ದು
1ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು <<ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?>> ಎಂದು ಯೆಹೋವನನ್ನು ಕೇಳಲು2ಆತನು ಅವರಿಗೆ <<ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ>> ಅಂದನು.3ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, <<ಕಾನಾನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬರುವೆವು>> ಎಂದು ಹೇಳಿದರು.4ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು.5ಅವರು ಅಲ್ಲಿ ಅದೋನೀ ಬೆಜೆಕನನ್ನು ಸಂಧಿಸಿ, ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಸೋಲಿಸಿದರು.6ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.7ಆಗ ಅದೋನೀಬೆಜೆಕನು, <<ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ>> ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.8ಯೆಹೂದ್ಯರು ಯೆರೂಸಲೇಮಿನವರೊಡನೆ ಯುದ್ಧಮಾಡಿ, ಅಲ್ಲಿನ ಜನರನ್ನು ಹಿಡಿದು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಯಿಟ್ಟರು.9 ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.10 ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.11ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿರ್ಯತಸೇಫೆರ್ ಎಂಬ ಹೆಸರಿತ್ತು.12ಕಿರ್ಯತಸೇಫೆರ ಎಂಬ ಪಟ್ಟಣವನ್ನು ವಶಪಡಿಸಿಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಿದನು.13ಅವನ ತಮ್ಮನೂ, ಕೆನಜನ ಮಗನೂ ಆದ ಒತ್ನೀಯೇಲನು ಕಿರ್ಯತ್ ಸೇಫೆರನ್ನು ವಶಪಡಿಸಿಕೊಂಡನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿಕೊಟ್ಟನು.14ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಹೊಲವನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು, <<ನಿನಗೇನು ಬೇಕು?>> ಎಂದು ಆಕೆಯನ್ನು ಕೇಳಲು15ಆಕೆಯು, <<ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು>> ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು.16ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.17ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದು ಕರೆದರು.18ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.19ಯೆಹೋವನು ಯೆಹೂದ್ಯರ ಸಂಗಡ ಇದ್ದುದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದುದರಿಂದ ಅವರನ್ನು ಹೊರಡಿಸುವುದಕ್ಕೆ ಆಗಲಿಲ್ಲ.20ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.21ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.22ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.23ಅವರು ಲೂಜ್ ಎಂದು ಕರೆಯುತ್ತಿದ್ದ ಬೇತೇಲ್ ಊರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದರು.24ಅವರು ಆ ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, <<ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು>> ಎಂದು ಹೇಳಲು ಅವನು ಅವರಿಗೆ ಆ ದಾರಿಯನ್ನು ತೋರಿಸಿದನು.25ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಏನು ಮಾಡದೆ ಕಳುಹಿಸಿಬಿಟ್ಟರು.26ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.27ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.28ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ.29ಎಫ್ರಾಯೀಮ್ಯರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದ್ದರಿಂದ ಕಾನಾನ್ಯರು ಎಫ್ರಾಯೀಮ್ಯರ ಮಧ್ಯದಲ್ಲೇ ವಾಸಿಸುವವರಾದರು.30ಜೆಬುಲೂನ್ಯರು ಕಿತ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಓಡಿಸಲಿಲ್ಲ. ಇದರಿಂದ ಕಾನಾನ್ಯರು ಅವರ ಮಧ್ಯದಲ್ಲೇ ವಾಸಮಾಡುವವರಾದರು. ಆದರೆ ಜೆಬುಲೂನ್ಯರು ಕಾನಾನ್ಯರನ್ನು ಗುಲಾಮರನ್ನಾಗಿ ಮಾಡಿಕೊಂಡರು.31ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿಬಿಡಲಿಲ್ಲ;32ಹೀಗಾಗಿ ಆಶೇರ್ಯರು ಕಾನಾನ್ಯರನ ಮಧ್ಯದಲ್ಲೇ ವಾಸಮಾಡಿದರು.33ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳಲ್ಲಿ ಸ್ವಾಧೀನ ಮಾಡಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು ಮತ್ತು ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು.34ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು.35ಹೀಗೆ ಅಮೋರಿಯರು ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳ ಬಳಿ ಇದ್ದ ಹರ್ ಹೆರೆಸ್ ಎಂಬ ಬೆಟ್ಟದ ಹತ್ತಿರ ವಾಸಿಸಲು ನಿರ್ಧಾರಮಾಡಿಕೊಂಡರು. ಆದರೆ ಯೋಸೇಫನ ಕುಲದವರು ಅವರನ್ನು ಸೋಲಿಸಿ ಗುಲಾಮರನ್ನಾಗಿ ಮಾಡಿಕೊಂಡರು.36ಅಮೋರಿಯರ ಮೇರೆಯು ಅಕ್ರಬ್ಬೀಮ್ ಮೇಲುದಿಣ್ಣೆಯಿಂದ ಸೇಲಾ ಊರಿನಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.
2ಬೋಕೀಮಿನಲ್ಲಿ ದೇವದೂತನು
1ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಾಯೇಲ್ಯರಿಗೆ, <<ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ, ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರೆತಂದೆನು. <ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲವೆಂದು ನಾನು ಮಾತು ಕೊಟ್ಟಾಗ,2ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು> ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?3<ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು> ಎಂದು ನಾನು ಮೊದಲೇ ಹೇಳಿದ್ದೆನಲ್ಲಾ>> ಅಂದನು.4ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.5ಮತ್ತು ಆ ಸ್ಥಳಕ್ಕೆ ಬೋಕೀಮೆಂಬ ಹೆಸರಿಟ್ಟು, ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು.ಯೆಹೋಶುವನ ಮರಣ
6ಯೆಹೋಶುವನು ಇಸ್ರಾಯೇಲ್ಯರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವಾಧೀನಮಾಡಿಕೊಂಡರು.7ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಬದುಕಿದ್ದ, ಯೆಹೋವನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವನನ್ನು ಸೇವಿಸುತ್ತಿದ್ದರು.8ಯೆಹೋವನ ಸೇವಕನಾದ ನೂನನ ಮಗ ಯೆಹೋಶುವನು ನೂರ ಹತ್ತು ವರ್ಷದವನಾಗಿ ಮರಣಹೊಂದಿದನು.9ಅವನನ್ನು ಅವನ ಸ್ವಾಧೀನದ ಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುತ್ತದೆ.10ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.ಇಸ್ರಾಯೇಲ್ಯರು ದ್ರೋಹಿಗಳಾದ್ದದು
11ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.12ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.13ಅವರು ಯೆಹೋವನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದರು.14ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.15ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು.16ಆಗ ಯೆಹೋವನು ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸುವುದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದನು.17ಇಸ್ರಾಯೇಲರು ಅವರ ಮಾತನ್ನೂ ಕೇಳದೆ ಅನ್ಯದೇವರುಗಳನ್ನು ಪೂಜಿಸಿ, ಅವುಗಳಿಗೆ ಅಡ್ಡಬಿದ್ದು ದೈವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪೂರ್ವಿಕರ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು. ಅವರಂತೆ ನಡೆಯಲೇ ಇಲ್ಲ.18ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.19ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ.20ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, <<ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.21ಹೀಗಿರುವುದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸದೆ ಬಿಟ್ಟಿದ ಜನಾಂಗಗಳಲ್ಲಿ ನಾನು ಒಂದನ್ನು ಹೊರಡಿಸಿಬಿಡುವುದಿಲ್ಲ.22ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು>> ಅಂದನು.23ಇದರಿಂದ ಯೆಹೋವನು ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಓಡಿಸಲಿಲ್ಲ.
3ದೇಶದಲ್ಲಿ ಉಳಿದ ಅನ್ಯಜನಾಂಗಗಳು
1ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ,2ಇಸ್ರಾಯೇಲ್ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,3 ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.4ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು.5 ಇಸ್ರಾಯೇಲರು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ,6ಅವರ ಕನ್ಯೆಯರನ್ನು ತಾವು ತಂದು, ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು, ಅವರ ದೇವತೆಗಳನ್ನು ಸೇವಿಸಿದರು.ಒತ್ನೀಯೇಲ್
7ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.8ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.9ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.10 ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.11ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.ಏಹೂದ
12ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.13ಇವನು ಅಮ್ಮೋನಿಯರನ್ನೂ, ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು.14ಇಸ್ರಾಯೇಲರು ಅವನಿಗೆ ಹದಿನೆಂಟು ವರ್ಷ ದಾಸರಾಗಿದ್ದರು.15ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.16ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ17ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ.18ಏಹೂದನು ಕಪ್ಪಕಾಣಿಕೆಯನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತುಕೊಂಡು ಬಂದಿದ್ದ ಆಳುಗಳನ್ನು ಕಳುಹಿಸಿಬಿಟ್ಟು,19ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು, <<ಅರಸನೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವಿದೆ>> ಅಂದನು. ಆಗ ಅರಸನು, <<ನಿಶ್ಯಬ್ದ>> ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು.20ಅರಸನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, <<ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ>> ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು.21ಆಗ ಏಹೂದನು ಎಡಗೈ ಚಾಚಿ ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯಲ್ಲಿ ತಿವಿದನು.22ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯೊಳಗೆ ಹೊಕ್ಕಿತು. ಅವನು ಕತ್ತಿಯನ್ನು ಹೊರಗೆ ತೆಗೆಯದಿದ್ದುದರಿಂದ ಕೊಬ್ಬು ಕತ್ತಿಯನ್ನು ಸುತ್ತಿಕೊಂಡಿತು; ಕೊಬ್ಬು ಬೆನ್ನಿನಿಂದ ಹೊರಗೆ ಬಂದಿತು.23ಏಹೂದನು ಪಡಸಾಲೆಗೆ ಬಂದು, ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ ಬೀಗಹಾಕಿ ಹೊರಟು ಹೋದನು.24ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬೀಗಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು25ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವುದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆಯಲು, ಇಗೋ, ಅವರ ಒಡೆಯನು ಸತ್ತುಬಿದ್ದಿದ್ದನು.26ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು,27ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.28ಅವನು ಅವರ ನಾಯಕನಾಗಿ, <<ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ>> ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.29ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರಮಿಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದಂತೆ ಹತ್ಯೆಮಾಡಿದರು.30ಆ ದಿನದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು. ದೇಶದಲ್ಲಿ ಎಂಭತ್ತು ವರ್ಷ ಸಮಾಧಾನವಿತ್ತು.ಶಮ್ಗರ್
31ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು.
4ದೆಬೋರಾ ಮತ್ತು ಬಾರಾಕ್
1ಏಹೂದನು ಮರಣಹೊಂದಿದ ನಂತರ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾಗಿದ್ದರು.2ಯೆಹೋವನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ಒಪ್ಪಿಸಿಕೊಟ್ಟನು. ಹರೋಷೆತ್ ಹಗೊಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಧಿಪತಿಯಾಗಿದ್ದನು.3ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.4ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ, ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲರಲ್ಲಿ ನ್ಯಾಯತೀರ್ಪನ್ನು ಮಾಡುತ್ತಿದ್ದಳು.5ಆಕೆ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರ ವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಕುಳಿತುಕೊಂಡಿರುತ್ತಿದ್ದಳು. ಇಸ್ರಾಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.6ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, <<ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, <ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.7ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ> >> ಅಂದಳು.8ಬಾರಾಕನು ಆಕೆಗೆ, <<ನೀನು ನನ್ನ ಸಂಗಡ ಬರುವುದಾದರೆ ಹೋಗುತ್ತೇನೆ; ಇಲ್ಲವಾದರೆ ಹೋಗುವುದಿಲ್ಲ>> ಅನ್ನಲು9ಆಕೆಯು, <<ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲಿ ಉಂಟಾಗುವ ಗೌರವ ನಿನಗೆ ಸಲ್ಲುವುದಿಲ್ಲ. ಯಾಕೆಂದರೆ ಒಬ್ಬ ಸ್ತ್ರೀ ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುವನು>> ಎಂದು ಹೇಳಿ ದೆಬೋರಳು ಬಾರಾಕನೊಡನೆ ಕೆದೆಷಿಗೆ ಹೋದಳು.10ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಯಿಸಿದನು. ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು, ದೆಬೋರಳೂ ಅವರೊಂದಿಗೆ ಹೋದಳು.11(ಕೇನ್ಯನಾದ) ಹೆಬೆರನು ಉಳಿದ ಕೇನ್ಯರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. ಕೇನ್ಯರು ಮೋಶೆಯ ಮಾವನಾದ ಹೋಬಾಬನ ವಂಶದವರು. ಹೆಬೆರನು ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದ ವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.12ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ13ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ, ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಅನ್ಯಜನರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.14ಆಗ ದೆಬೋರಳು ಬಾರಾಕನಿಗೆ, <<ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇಂದೇ. ನಿಶ್ಚಯವಾಗಿ ಆತನು ತಾನೇ ನಿನಗೆ ಮುಂದಾಗಿ ಯುದ್ಧಕ್ಕೆ ಹೊರಡುವನು>> ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದ ಇಳಿದನು.15ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನು ರಥದಿಂದ ಇಳಿದು ಓಡಿಹೋದನು.16ಬಾರಾಕನು ಅವನ ಸೈನ್ಯರಥಗಳನ್ನು ಅನ್ಯಜನರ ಹರೋಷೆತಿನ ವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರೂ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.17ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದುದರಿಂದ ಸೀಸೆರನು ಕಾಲುನಡಿಗೆಯಿಂದ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳ ಗುಡಾರದ ಕಡೆಗೆ ಹೋದನು.18ಯಾಯೇಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, <<ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿಗೆ ಬನ್ನಿರಿ>> ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು.19ಅವನು ಆಕೆಗೆ, <<ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ಬಾಯಾರಿಕೆಯಾಗಿದೆ>> ಅಂದನು. ಆಕೆಯು ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಲು ಕೊಟ್ಟು ಅವನನ್ನು ಪುನಃ ಮುಚ್ಚಿದಳು.20ಅವನು ಆಕೆಗೆ, <<ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು <ಇಲ್ಲಿ ಒಬ್ಬ ಮನುಷ್ಯನಿದ್ದಾನೆಯೇ ಎಂದು ವಿಚಾರಿಸಿದರೆ> ಇಲ್ಲ ಎಂದು ಹೇಳು>> ಎಂದು ಹೇಳಿದನು.21ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ, ಒಂದು ಸುತ್ತಿಗೆಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ, ಮೆಲ್ಲಗೆ ಹತ್ತಿರ ಹೋಗಿ, ಅವನ ತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.22ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿಗೆ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು, <<ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆ>> ಎಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತು ಬಿದ್ದದ್ದನ್ನು ಕಂಡನು. ಅವನ ಕಣ್ತಲೆಯಲ್ಲಿ ಗೂಟವು ಜಡಿದಿತ್ತು.23ಆ ದಿನದಲ್ಲಿ ದೇವರು ಕಾನಾನ್ಯ ರಾಜನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತಗ್ಗಿಸಿದನು.24ಇಸ್ರಾಯೇಲರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.
5ದೆಬೋರಳ ಜಯಗೀತೆ
1ಆ ದಿನದಲ್ಲಿ ದೆಬೋರಳೂ ಅಬೀನೋವಮನ ಮಗನಾದ ಬಾರಾಕನೂ ಈ ಗೀತೆಯನ್ನು ಹಾಡಿದರು:
2<< ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ;ಜನರು ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ್ದಾರೆ,
ಯೆಹೋವನನ್ನು ಕೊಂಡಾಡಿರಿ.
3<<ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ!ನಾನು ಯೆಹೋವನನ್ನು ಕೀರ್ತಿಸುವೆನು;
ನಾನು ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತುತಿ ಗೀತೆ ಹಾಡುವೆನು.
4<<ಯೆಹೋವನೇ, ನೀನು ಹೊರಟುಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ
ಭೂಲೋಕವು ಕಂಪಿಸಿತು, ಆಕಾಶವು ನಡುಗಿತು;
ಮೇಘಮಂಡಲವು ಮಳೆಗರೆಯಿತು.
5ಯೆಹೋವನ ಮುಂದೆ ಪರ್ವತಗಳು ಕರಗಿಹೋದವು, ಇಸ್ರಾಯೇಲಿನ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು.
6<<ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ,ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು.
ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು.
7ದೆಬೋರಳಾದ ನಾನು ಇಸ್ರಾಯೇಲರಲ್ಲಿ ತಾಯಿಯಂತೆ ಎದ್ದುಬರುವವರೆಗೆಇಸ್ರಾಯೇಲ್ ಗ್ರಾಮಗಳು ಹಾಳುಬಿದ್ದಿದ್ದವು.
8ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು;ಯುದ್ಧವು ಉರುಬಾಗಿಲವರೆಗೂ ಬಂದಿತ್ತು.
ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.
9ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ,ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ;
ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ.
10<<ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ,ರತ್ನಗಂಬಳಿಗಳ ಮೇಲೆ ಕುಳಿತುಕೊಳ್ಳುವವರೇ, ಕಾಲ್ನಡಿಗೆಯಲ್ಲಿ ಪ್ರಯಾಣಿಸುವವರೇ, ಗಾನಮಾಡಿರಿ.
11ಸೇದುವ ಬಾವಿಗಳ ಬಳಿಯಲ್ಲಿ ಬಿಲ್ಲುಗಾರರ ಧ್ವನಿಗಿಂತ ಗಟ್ಟಿಯಾಗಿಯೆಹೋವನ ನೀತಿಸಾಧನೆಯ ವರ್ಣನೆಯನ್ನು ಕೇಳಿರಿ.
ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ.
ಆ ಕಾಲದಲ್ಲಿ ಯೆಹೋವನ ಜನರು ಊರುಬಾಗಿಲುಗಳಿಗೆ ಇಳಿದು ಬಂದರು.
12<ಎಚ್ಚರವಾಗು, ದೆಬೋರಳೇ! ಎಚ್ಚರವಾಗು,ಎಚ್ಚರವಾಗು, ಎಚ್ಚರವಾಗಿ ಗಾನಮಾಡು.
ಬಾರಾಕನೇ, ಏಳು;
ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.>
13<<ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು.ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು.
14ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು.
ಮಾಕೀರನ ಗೋತ್ರದಿಂದ ಪ್ರಧಾನರೂ
ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ
15ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲಪ್ರಭುಗಳೂಇಸ್ಸಾಕಾರರೊಡನೆ ಬಾರಾಕನೂ ಆಗಮಿಸಿದರು.
ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ತಟ್ಟನೆ ತಗ್ಗಿನ ಪ್ರದೇಶಕ್ಕೆ ಬಂದರು.
ರೂಬೇನ್ಯರ ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ
16ರೂಬೇನ್ಯರೇ, ನೀವು ಕುರಿಹಟ್ಟಿಗಳಲ್ಲಿ,ಮಂದೆಗಳ ಮಧ್ಯದಲ್ಲಿ ಕೊಳಲೂದುವುದನ್ನು ಕೇಳಬೇಕೆಂದು ಅಲ್ಲಿಯೇ ಕುಳಿತಿರುವುದೇಕೆ?
ರೂಬೇನ್ಯರು ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ.
17ಗಿಲ್ಯಾದ್ಯರು ಯೊರ್ದನಿನ ಆಚೆಯಲ್ಲೇ ಉಳಿದರು.ದಾನ್ ಕುಲದವರು ಹಡಗುಗಳಲ್ಲಿಯೇ ಉಳಿದದ್ದೇಕೆ?
ಆಶೇರ್ ಕುಲದವರು ತಮ್ಮ ರೇವುಗಳನ್ನು ಬಿಡದೆ ಸಮುದ್ರ ತೀರದಲ್ಲಿ ಸುಮ್ಮನೆ ಕುಳಿತುಬಿಟ್ಟರು.
18ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು,ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು.
19<<ಅರಸರು ಬಂದು ಯುದ್ಧಮಾಡಿದರು;ಕಾನಾನ್ಯ ರಾಜರು ಮೆಗಿದ್ದೋ ನೀರಿನ ಕಾಲುವೆಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಹೋರಾಡಿದರು.
ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.
20ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು. 21ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು.ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು.
22ಆಗ ಅತಿವೇಗವಾಗಿ ಓಡುತ್ತಿದ್ದ ಅವರ ಬಲವಾದ ಕುದುರೆಗಳ ಗೊರಸುಗಳ ಪೆಟ್ಟಿನಿಂದ ನೆಲವು ಕಂಪಿಸಿತು. 23<ಮೇರೋಜ್> ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ.<ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ.
ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ;
ಅವರನ್ನು ಶಪಿಸೇ ಶಪಿಸಿರಿ!>
24<<ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳೆ ಭಾಗ್ಯವಂತಳು.ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಯೇ ಆಶೀರ್ವದಿಸಲ್ಪಟ್ಟವಳು.
25ನೀರು ಕೇಳಿದನು, ಹಾಲು ಕೊಟ್ಟಳು;ಉತ್ತಮ ಪಾತ್ರೆಯಲ್ಲಿ ಮಜ್ಜಿಗೆ ಕೊಟ್ಟಳು.
26ಕೈಚಾಚಿ ಗೂಟವನ್ನು ತೆಗೆದುಕೊಂಡಳು;ಬಲಗೈಯಲ್ಲಿ ದೊಡ್ಡ ಸುತ್ತಿಗೆಯನ್ನು ಹಿಡಿದಳು;
ಆ ಸುತ್ತಿಗೆಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು.
ಅವನ ನೆತ್ತಿಗೆ ತಿವಿದು ಜಡಿದಳು.
27ಅವನು ಆಕೆಯ ಕಾಲುಗಳ ಬಳಿಯಲ್ಲಿ ಉರುಳಿ ಬಿದ್ದನು;ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು.
ಅವನು ಬಿದ್ದಲ್ಲೇ ಸತ್ತನು.
28<<ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು;ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು.
<ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು!
ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ> ಅಂದಳು.
29ಬುದ್ಧಿವಂತೆಯರಾದ ಸ್ತ್ರೀಯರು ಕೊಟ್ಟ ಉತ್ತರವನ್ನೇಈಕೆಯು ತನ್ನಲ್ಲಿ ತಾನೇ ಅಂದುಕೊಳ್ಳುತ್ತಿದ್ದದ್ದು ಏನೆಂದರೆ,
30<ನಿಶ್ಚಯವಾಗಿ ಅವರಿಗೆ ಕೊಳ್ಳೆ ಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ?.ಪ್ರತಿಯೊಬ್ಬ ಪುರುಷನಿಗೆ ಒಬ್ಬಿಬ್ಬರು ಹೆಂಗಸರೂ, ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ, ವಿಚಿತ್ರವಾಗಿ ಕಸೂತಿಹಾಕಿದ ಎರಡು ವಸ್ತ್ರಗಳೂ, ಕಂಠಮಾಲೆಯೂ ದೊರಕಿರುತ್ತವೆ.>
31ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ.ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.>>
ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.
6ಮಿದ್ಯಾನ್ಯರ ಕಾಟವೂ, ಯೆಹೋವನು ಗಿದ್ಯೋನನನ್ನು ಕರೆದದ್ದೂ
1ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದ್ದರಿಂದ ಆತನು ಅವರನ್ನು ಏಳು ವರ್ಷಗಳ ಕಾಲ ಮಿದ್ಯಾನ್ಯರ ಕೈಗೆ ಒಪ್ಪಿಸಿದನು.2ಮಿದ್ಯಾನ್ಯರ ಹಸ್ತವು ಬಲಗೊಂಡಿದ್ದರಿಂದ ಇಸ್ರಾಯೇಲರು ಅವರಿಗೆ ಹೆದರಿ ಪರ್ವತಗಳಲ್ಲಿ ಗುಹೆಗಳನ್ನು, ಕಂದರಗಳನ್ನು ಮಾಡಿಕೊಂಡು ಅದರಲ್ಲಿ ವಾಸಿಸುತ್ತಿದ್ದರು.3ಇವರು ಬಿತ್ತನೆಮಾಡಿದಾಗಲೆಲ್ಲಾ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳಿದುಕೊಳ್ಳುತ್ತಿದ್ದರು.4ಅವರು ಗಾಜಾ ಪ್ರಾಂತ್ಯದವರೆಗಿದ್ದ ಎಲ್ಲಾ ಭೂಮಿಯ ಹುಟ್ಟುವಳಿಯನ್ನು ಹಾಳುಮಾಡಿಬಿಡುತ್ತಿದ್ದುದರಿಂದ ಇವರಿಗೆ ದವಸಧಾನ್ಯವಾಗಲಿ, ಕುರಿ, ದನ, ಕತ್ತೆಗಳಾಗಲಿ ಉಳಿಯಲೇ ಇಲ್ಲ.5ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ಮಿಡತೆಗಳಂತೆ ಗುಂಪುಗುಂಪಾಗಿ ಬರುತ್ತಿದ್ದರು. ಅವರೂ ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.6ಇಸ್ರಾಯೇಲರು ಮಿದ್ಯಾನ್ಯರ ದೆಸೆಯಿಂದ ಬಹಳವಾಗಿ ಕುಗ್ಗಿಹೋಗಿ ಯೆಹೋವನಿಗೆ ಮೊರೆಯಿಟ್ಟರು.7ಇಸ್ರಾಯೇಲರು ಮಿದ್ಯಾನ್ಯರ ಹಿಂಸೆಯನ್ನು ಸಹಿಸಲಾರದೆ ಯೆಹೋವನಿಗೆ ಮೊರೆಯಿಟ್ಟಾಗ8ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ, <<ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವುದೇನೆಂದರೆ <ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರೆತಂದೆನು.9ಐಗುಪ್ತ್ಯರಿಂದ ನಿಮ್ಮನ್ನು ಬಿಡಿಸಿದ್ದಲ್ಲದೆ ಬೇರೆ ಎಲ್ಲಾ ಬಾಧಕರಿಂದಲೂ ನಿಮ್ಮನ್ನು ಬಿಡಿಸಿ, ಅವರನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ನಿಮಗೆ ಕೊಟ್ಟೆನು.10ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ, ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುತ್ತಿದ್ದಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಆಜ್ಞಾಪಿಸಿದ್ದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ> >> ಅಂದನು.11ಆ ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.12ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, <<ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ>> ಅಂದನು.13ಆಗ ಗಿದ್ಯೋನನು ಅವನಿಗೆ <<ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ>> ಅಂದನು.14ಆಗ ಯೆಹೋವನು ಅವನನ್ನು ಚೆನ್ನಾಗಿ ನೋಡಿ, <<ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ನಿನ್ನ ಈ ಬಲದಿಂದ ಇಸ್ರಾಯೇಲ್ಯರನ್ನು ಮಿದ್ಯಾನ್ಯರಿಂದ ಬಿಡಿಸು>> ಎಂದು ಹೇಳಿದನು.15ಆಗ ಗಿದ್ಯೋನನು ಆತನಿಗೆ, <<ಕರ್ತನೇ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು>> ಅಂದನು.16ಯೆಹೋವನು ಅವನಿಗೆ, <<ನಾನು ನಿನ್ನ ಸಂಗಡ ಇರುವುದರಿಂದ ನೀನು ಮಿದ್ಯಾನ್ಯರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ>> ಅಂದನು.17ಅವನು ಆತನಿಗೆ, <<ಕರ್ತನೇ, ದಯವಿರಲಿ; ನನ್ನೊಂದಿಗೆ ಮಾತನಾಡುತ್ತಿರುವವರು ತಾವೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.18ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವ ವರೆಗೆ ತಾವು ಈ ಸ್ಥಳವನ್ನು ಬಿಡಬಾರದು>> ಎಂದು ಬಿನ್ನವಿಸಲು ಆತನು, <<ನೀನು ತಿರುಗಿ ಬರುವ ವರೆಗೆ ನಾನು ಇಲ್ಲೇ ಇರುವೆನು>> ಅಂದನು.19ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ತೆಗೆದುಕೊಂಡು, ಒಂದು ಏಫಾ ಅಂದರೆ ಸುಮಾರು ಮೂವ್ವತ್ತು ಸೇರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಮಾಂಸವನ್ನು ಸಿದ್ಧಮಾಡಿ, ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.20ಆಗ ದೇವದೂತನು ಅವನಿಗೆ, <<ಮಾಂಸವನ್ನೂ, ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಅದರ ಮೇಲೆ ಹೊಯ್ಯಿ>> ಅನ್ನಲು ಅವನು ಹಾಗೆಯೇ ಮಾಡಿದನು.21ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.22ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, <<ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ>> ಎಂದು ಕೂಗಿದನು.23ಆದರೆ ಯೆಹೋವನು ಅವನಿಗೆ, <<ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ>> ಅಂದನು.24ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು; ಅದು ಈ ವರೆಗೂ ಅಬೀಯೆಜೆರನ ಗೋತ್ರದವರ ಒಫ್ರದಲ್ಲಿರುತ್ತದೆ.25ಅದೇ ದಿನ ರಾತ್ರಿಯಲ್ಲಿ ಯೆಹೋವನು ಅವನಿಗೆ, <<ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ, ಏಳು ವರ್ಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡು ಹೋಗಿ ನಿನ್ನ ತಂದೆಯು ಕಟ್ಟಿರುವ ಬಾಳನ ಯಜ್ಞವೇದಿಯನ್ನು ಕೆಡವಿ, ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹಸ್ತಂಭವನ್ನು ಕಡಿದುಹಾಕು.26ಈ ಗುಡ್ದದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸು. ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ, ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು>> ಎಂದು ಹೇಳಿದನು.27ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ, ಊರಿನವರಿಗೂ ಹೆದರಿಕೊಂಡಿದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.28ಊರಿನ ಜನರು ಹೊತ್ತಾರೆಯಲ್ಲೆದ್ದು ಬಾಳನ ಯಜ್ಞವೇದಿಯು ಕೆಡವಲ್ಪಟ್ಟಿರುವುದನ್ನೂ, ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭವು ಕಡಿಯಲ್ಪಟ್ಟಿರುವುದನ್ನೂ, ಹೊಸದಾಗಿ ಕಟ್ಟಿದ ಯಜ್ಞವೇದಿಯ ಮೇಲೆ ಎರಡನೆಯ ಹೋರಿಯು ಯಜ್ಞವಾದದ್ದನ್ನೂ ಕಂಡು,29<<ಹೀಗೆ ಮಾಡಿದವರಾರು?>> ಎಂದು ಒಬ್ಬರನ್ನೊಬ್ಬರು ವಿಚಾರಿಸುವಲ್ಲಿ ಯೋವಾಷನ ಮಗನಾದ ಗಿದ್ಯೋನನೇ ಎಂದು ತಿಳಿದು ಬಂದಿತು.30ಆ ಜನರು ಯೋವಾಷನಿಗೆ, <<ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ; ಅವನು ಸಾಯಬೇಕು; ಯಾಕೆಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ>> ಅಂದರು.31ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ, <<ಬಾಳನಿಗೋಸ್ಕರ ನೀವು ವ್ಯಾಜ್ಯಮಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯಮಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಬಾಳನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯಮಾಡಲಿ>> ಎಂದನು.32ಆ ದಿನದಲ್ಲಿ ಅವನು, <<ಬಾಳನು ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟವನೊಡನೆ ತಾನೇ ವ್ಯಾಜ್ಯಮಾಡಲಿ>> ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.33ಇಷ್ಟರಲ್ಲಿ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣದೇಶದವರೂ ಸೇರಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.34ಆಗ ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತ್ತು. ಅವನು ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.35ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಲಾಗಿ ಅವರೂ ಕೂಡಿಬಂದರು. ಆಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ಯುದ್ಧಪ್ರಯಾಣಕ್ಕೋಸ್ಕರ ಸೇರಿಕೊಂಡರು.36ಮತ್ತು ಗಿದ್ಯೋನನು ದೇವರಿಗೆ, <<ನೀನು ಹೇಳಿದಂತೆ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೋ ಇಲ್ಲವೋ ಎಂಬುದನ್ನು ತಿಳಿಯಪಡಿಸು.37ಇಗೋ, ನಾನು ಕಣದಲ್ಲಿ ಕುರಿಯ ಉಣ್ಣೆಯನ್ನು ಇಡುತ್ತೇನೆ; ಅದರಲ್ಲಿ ಮಾತ್ರ ಮಂಜುಬಿದ್ದು ನೆಲವೆಲ್ಲಾ ಒಣಗಿದ್ದರೆ ನೀನು ಹೇಳಿದಂತೆಯೇ ಇಸ್ರಾಯೇಲರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೆಂದು ತಿಳಿಯುವೆನು>> ಎಂಬುದಾಗಿ ವಿಜ್ಞಾಪಿಸಿದನು.38ಹಾಗೆಯೇ ಆಯಿತು; ಅವನು ಮರುದಿನ ಹೊತ್ತಾರೆಯಲ್ಲಿ ಎದ್ದು ಉಣ್ಣೆಯನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.39ಅವನು ತಿರುಗಿ ದೇವರಿಗೆ, <<ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತನಾಡುತ್ತೇನೆ. ಇನ್ನು ಒಂದೇ ಸಾರಿ ಈ ಉಣ್ಣೆಯಿಂದ ನಿನ್ನನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಈ ಉಣ್ಣೆ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿ ಬಿದ್ದಿರಲಿ>> ಅಂದನು.40ಆ ರಾತ್ರಿ ದೇವರು ಹಾಗೆಯೇ ಮಾಡಿದನು; ಉಣ್ಣೆ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿ ಬಿದ್ದಿತ್ತು.
7ಗಿದ್ಯೋನನು ಮಿದ್ಯಾನ್ಯರನ್ನು ಸೋಲಿಸಿದ್ದು
1ಆನಂತರ ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ, ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಬಿಡಾರ ಹಾಕಿಕೊಂಡರು. ಇವರ ಉತ್ತರದಿಕ್ಕಿನಲ್ಲಿ ಮೋರೆಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.2ಆಗ ಯೆಹೋವನು ಗಿದ್ಯೋನನಿಗೆ, <<ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.3ಆದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, <ಧೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು> >> ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.4ಯೆಹೋವನು ತಿರುಗಿ ಗಿದ್ಯೋನನಿಗೆ, <<ನಿನ್ನ ಬಳಿಯಲ್ಲಿರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಹಳ್ಳಕ್ಕೆ ಕರೆದುಕೊಂಡು ಹೋಗು; ನಾನು, ಅಲ್ಲಿ ಈ ಜನರ ಸಂಖ್ಯೆಯನ್ನು ಕಡಿಮೆಮಾಡಿ ನಿನಗೆ ಕೊಡುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ; ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ>> ಅಂದನು.5ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಯೆಹೋವನು ಅವನಿಗೆ, <<ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ, ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು>> ಎಂದು ಹೇಳಿದನು.6ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿಕುಡಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು.7ಆಗ ಯೆಹೋವನು ಗಿದ್ಯೋನನಿಗೆ, <<ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ>> ಎಂದು ಆಜ್ಞಾಪಿಸಿದನು.8ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ, ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು.9ಅದೇ ದಿನದ ರಾತ್ರಿಯಲ್ಲಿ ಯೆಹೋವನು ಅವನಿಗೆ, <<ನೀನು ಎದ್ದು ಹೋಗಿ, ಶತ್ರುಗಳ ಪಾಳೆಯದ ಮೇಲೆ ಬೀಳು. ಅದನ್ನು ನಿನಗೆ ಒಪ್ಪಿಸಿಕೊಡುತ್ತೇನೆ.10ಆದರೆ ನೀನು ಅವರ ಮೇಲೆ ಬೀಳುವುದಕ್ಕೆ ಹೆದರುತ್ತೀಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತನಾಡಿಕೊಳ್ಳುವುದನ್ನು ಲಾಲಿಸು;11ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯಬರುವುದು>> ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.12ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.13ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, <<ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು, ಒಂದು ಡೇರೆಗೆ ತಗಲಿ, ಅದನ್ನು ಬುಡಮೇಲು ಮಾಡಿ ಬೀಳಿಸಿಬಿಟ್ಟಿತು>> ಎಂದು ಹೇಳಿದನು14ಆಗ ಅವನ ಜೊತೆಗಾರನು, <<ಇದು ಇಸ್ರಾಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ>> ಅಂದನು.15ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, <<ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ>> ಅಂದನು.16ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ, ಉರಿಯುವ ಪಂಜು ಇರುವ ಬರಿಕೊಡವನ್ನೂ ಕೊಟ್ಟು ಅವರಿಗೆ,17<<ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿರಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವೂ ಮಾಡಬೇಕು.18ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, <ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ> >> ಎಂದು ಹೇಳಿದನು.19ರಾತ್ರಿಯ ಎರಡನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.20ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು, ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, <<ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಆಗಿದೆ>> ಎಂದು ಕೂಗಿ21ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು. ಪಾಳೆಯದವರಾದರೋ ಕೂಗುತ್ತಾ ಓಡಿಹೋದರು.22ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.23ಇಸ್ರಾಯೇಲ್ಯರಾದ ನಫ್ತಾಲಿ, ಆಶೇರ್ ಕುಲಗಳವರೂ, ಮನಸ್ಸೆ ಕುಲದ ಎಲ್ಲಾ ಜನರೂ ಕೂಡಿ ಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.24ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, <<ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್‌ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ>> ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್‌ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು.25ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬುವರನ್ನು ಹಿಡಿದು ಓರೇಬನನ್ನು, ಓರೇಬನ ಬಂಡೆಯ ಮೇಲೆಯೂ, ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.
8ಎಫ್ರಾಯೀಮ್ಯರು ಗಿದ್ಯೋನನೊಡನೆ ಕಲಹಮಾಡಿದ್ದು
1ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ, <<ನೀನು ಹೀಗೆ ಯಾಕೆ ಮಾಡಿದಿ? ಮಿದ್ಯಾನ್ಯರೊಡನೆ ಯುದ್ಧಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?>> ಎಂದು ಉಗ್ರಕೋಪದಿಂದ ಜಗಳವಾಡಿದರು.2ಆಗ ಅವನು ಅವರಿಗೆ, <<ನೀವು ಮಾಡಿದ ಕಾರ್ಯಕ್ಕೆ ಸಮಾನವಾಗುವಂತದ್ದು ನಾನೇನು ಮಾಡಿದೆ? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ, ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?3ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?>> ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.ಗಿದ್ಯೋನನು ಜೆಬಹ, ಚಲ್ಮುನ್ನರನ್ನು ಕೊಂದದ್ದು
4ಗಿದ್ಯೋನನು ಅವನ ಸಂಗಡ ಇದ್ದ ಮುನ್ನೂರು ಜನರು ಬಹಳ ದಣಿದವರಾಗಿದ್ದರೂ, ಹಿಂದಟ್ಟುತ್ತಾ ಯೊರ್ದನನ್ನು ದಾಟಿ ಸುಖೋತಿಗೆ ಬಂದರು.5ಗಿದ್ಯೋನನು ಸುಖೋತಿನವರಿಗೆ, <<ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನರನ್ನು ಹಿಂದಟ್ಟುತ್ತಾ ಇದ್ದೇನೆ>> ಅಂದನು.6ಆದರೆ ಸುಖೋತಿನ ಮುಖಂಡರು ಅವನಿಗೆ, <<ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ನೀನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?>> ಎಂದು ಉತ್ತರಕೊಟ್ಟರು.7ಆಗ ಗಿದ್ಯೋನನು ಅವರಿಗೆ, <<ಒಳ್ಳೇದು, ಯೆಹೋವನು ಜೆಬಹ, ಚಲ್ಮುನ್ನರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟ ತರುವಾಯ ನಾನು ನಿಮ್ಮನ್ನು ಕಾಡಿನಲ್ಲಿರುವ ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸುವೆನು>> ಎಂದು ಹೇಳಿದನು.8ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.9ಗಿದ್ಯೋನನು ಅವರಿಗೆ, <<ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಬುರುಜನ್ನು ಕೆಡವಿಬಿಡುವೆನು>> ಅಂದನು.10ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.11ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು.12ಜೆಬಹನೂ ಮತ್ತು ಚಲ್ಮುನ್ನನೂ ಓಡಿಹೋಗಲಾಗಿ, ಅವರನ್ನು ಹಿಂದಟ್ಟಿ ಹಿಡಿದು, ಅವರ ಸೈನ್ಯವನ್ನು ಚದರಿಸಿಬಿಟ್ಟನು.13ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದು,14ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು, ಆ ಊರಿನ ಮುಖಂಡರೂ, ಹಿರಿಯರೂ ಯಾರಾರೆಂದು ವಿಚಾರಿಸಲು ಅವನು ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆದುಕೊಟ್ಟನು.15ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, <<ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ಕೈಕಟ್ಟಿ ಸ್ವಾಧೀನಮಾಡಿಕೊಂಡಿದ್ದೀಯೋ? ಎಂದು ನನ್ನನ್ನು ನಿಂದಿಸಿದಿರಲ್ಲಾ;16ನೋಡಿರಿ, ಅವರು ಇಲ್ಲಿರುತ್ತಾರೆ>> ಎಂದು ಹೇಳಿ ಊರಿನ ಹಿರಿಯರನ್ನೂ, ಮುಖಂಡರನ್ನೂ, ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸಿ ಸುಖೋತಿನವರಿಗೆ ಬುದ್ಧಿಕಲಿಸಿದನು.17ಮತ್ತು ಪೆನೂವೇಲಿನ ಬುರುಜನ್ನು ಕೆಡವಿಬಿಟ್ಟು ಆ ಊರಿನ ಜನರನ್ನು ಸಂಹರಿಸಿದನು.18ಅವನು ಜೆಬಹ, ಚಲ್ಮುನ್ನರನ್ನು, <<ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?>> ಎಂದು ಕೇಳಲಾಗಿ ಅವರು ಅವನಿಗೆ, <<ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು>> ಎಂದು ಉತ್ತರಕೊಟ್ಟರು.19ಆಗ ಅವನು, <<ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ>> ಎಂದು ಹೇಳಿ20ತನ್ನ ಹಿರೀ ಮಗನಾದ ಎತೆರನಿಗೆ, <<ನೀನೆದ್ದು ಇವರನ್ನು ಕೊಂದುಹಾಕು>> ಅಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ.21ಆಗ ಜೆಬಹನೂ ಮತ್ತು ಚಲ್ಮುನ್ನನೂ ಗಿದ್ಯೋನನಿಗೆ, <<ನೀನೇ ಎದ್ದು ಬಂದು ನಮ್ಮನ್ನು ಕೊಂದುಹಾಕು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ>> ಅನ್ನಲು ಅವನೆದ್ದು ಜೆಬಹ, ಚಲ್ಮುನ್ನರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಿನಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.ಗಿದ್ಯೋನನ ಏಫೋದ್
22ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ, <<ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ, ನಿನ್ನ ಮಗನೂ, ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು>> ಎಂದರು.23ಅವನು ಅವರಿಗೆ, <<ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಯೆಹೋವನೇ ನಿಮ್ಮ ಅರಸನಾಗಿರುವನು.24ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಲಿ>> ಅಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದರಿಂದ ಅವರ ಬಳಿಯಲ್ಲಿ ಬಂಗಾರದ ಓಲೆಗಳು ಇದ್ದವು.25ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು, <<ನಾವು ಸಂತೋಷದಿಂದ ಕೊಡುವೆವು>> ಎಂದು ಹೇಳಿ, ಅಲ್ಲಿ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಓಲೆಗಳನ್ನು ಇಟ್ಟುಬಿಟ್ಟರು.26ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ, ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಓಲೆಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.27ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.28ಮಿದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ಪುನಃ ತಲೆಯೆತ್ತಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಲ್ವತ್ತು ವರ್ಷಗಳ ಕಾಲ ದೇಶದಲ್ಲಿ ಸಮಾಧಾನವಿತ್ತು.ಗಿದ್ಯೋನನ ಮರಣ
29ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು.30ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು.31ಅವನಿಗೆ ಶೆಕೆಮಿನಲ್ಲಿದ್ದ ತನ್ನ ಉಪಪತ್ನಿಯಲ್ಲಿ ಇನ್ನೊಬ್ಬ ಮಗನು ಹುಟ್ಟಲು, ಆ ಮಗನಿಗೆ ಅಬೀಮೆಲೆಕನೆಂದು ಹೆಸರಿಟ್ಟನು.32ಯೋವಾಷನ ಮಗನಾದ ಗಿದ್ಯೋನನು ದಿನತುಂಬಿದ ಮುದುಕನಾಗಿ ಮರಣ ಹೊಂದಲು, ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿಯು ಅವನ ತಂದೆಯಾದ ಯೋವಾಷನದಾಗಿತ್ತು.33ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‌ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.34ಸುತ್ತಣ ಎಲ್ಲಾ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಯೆಹೋವನನ್ನು ಮರೆತುಬಿಟ್ಟರು.35ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ಅವರು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.
9ಗಿದ್ಯೋನನ ಮಗ ಅಬೀಮೆಲೆಕನು
1ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರಮಾವಂದಿರಿಗೂ, ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನೆಂದರೆ,2<<ನೀವು ದಯವಿಟ್ಟು ಶೆಕೆಮಿನ ಹಿರಿಯರನ್ನು ಮಾತನಾಡಿಸಿ, <ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳ್ವಿಕೆ ಮಾಡುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ?> ಎಂದು ಅವರನ್ನು ಕೇಳಿ, ನಾನು ಅವರ ರಕ್ತಸಂಬಂಧಿಯಾಗಿದ್ದೇನೆ ಎಂಬುದನ್ನು ತಿಳಿಸಿರಿ>> ಅಂದನು.3ಅವರು ಶೆಕೆಮಿನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಲು ಅವರು, <<ಇವನು ನಮ್ಮ ಸಹೋದರನಾಗಿದ್ದಾನಲ್ಲಾ>> ಅಂದುಕೊಂಡು ಅವನ ಪಕ್ಷವನ್ನು ಹಿಡಿಯುವುದಕ್ಕೆ ಒಪ್ಪಿಕೊಂಡರು.4ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಕಾಕಪೋಕರನ್ನು ಕೂಡಿಸಿ,5ಅವರ ನಾಯಕನಾಗಿ ಹೊರಟು, ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು, ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.6ತರುವಾಯ ಎಲ್ಲಾ ಶೆಕೆಮಿನವರೂ ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು.ಯೋತಾಮನ ಸಾಮ್ಯ
7ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, <<ಶೆಕೆಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು>> ಎಂದನು.8<<ಒಮ್ಮೆ, ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು, <ನೀನು ಬಂದು ನಮಗೆ ಅರಸನಾಗು> ಅಂದವು.9ಆಗ ಅದು ಅವುಗಳಿಗೆ, <ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ, ಮನುಷ್ಯರು ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?> ಅಂದಿತು.10ತರುವಾಯ ಅವು ಅಂಜೂರ ಗಿಡದ ಬಳಿಗೆ ಹೋಗಿ ಅದಕ್ಕೆ, <ನೀನು ಬಂದು ನಮಗೆ ಅರಸನಾಗು> ಎನ್ನಲು11ಅದು, <ನಾನು ನನ್ನ ಶ್ರೇಷ್ಠವಾದ ಮಧುರಫಲದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?> ಎಂದಿತು.12ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ, <ನೀನು ಬಂದು ನಮಗೆ ಅರಸನಾಗು> ಎನ್ನಲು13ಅದು ಅವುಗಳಿಗೆ, <ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?> ಎಂದಿತು.14ಕೊನೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ, <ನೀನು ಬಂದು ನಮಗೆ ಅರಸನಾಗು> ಅನ್ನಲು15ಅದು, <ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು> ಎಂದಿತು.16<<ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯವೋ? ಅದು ಧರ್ಮಕಾರ್ಯವೋ? ಯೆರುಬ್ಬಾಳನು ನಿಮಗೆ ಮಾಡಿದ ಉಪಕಾರಕ್ಕೋಸ್ಕರ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರಮಾಡಿದಿರೋ?17ನನ್ನ ತಂದೆಯು ತನ್ನ ಜೀವದ ಆಶೆಯನ್ನು ತೊರೆದು, ಹೋರಾಡಿ, ನಿಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದನಲ್ಲಾ.18ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿ, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಮ್ಮ ಬಂಧುವೆಂದು ಹೇಳಿ, ಶೆಕೆಮಿನ ಅರಸನನ್ನಾಗಿ ಮಾಡಿಕೊಂಡಿದ್ದೀರಿ.19ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ, ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ.20ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ, ಮಿಲ್ಲೋ ಕೋಟೆಯವರನ್ನೂ ದಹಿಸಿಬಿಡಲಿ; ಶೆಕೆಮಿನವರಿಂದಲೂ, ಮಿಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ>> ಎಂದನು.21ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಂದ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು.ಶೆಕೆಮಿನವರು ಅಬೀಮೆಲೆಕನಿಗೆ ವಿರುದ್ಧ ತಿರುಗಿಬಿದ್ದರು
22ಅಬೀಮೆಲೆಕನು ಇಸ್ರಾಯೇಲರನ್ನು ಮೂರು ವರ್ಷ ಆಳಿದ ನಂತರ23ಯೆಹೋವನು ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು.24ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು.25ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆ ಮಾಡಿಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.26ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬುವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸವಿಟ್ಟರು.27ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.28ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು, <<ಅಬೀಮೆಲೆಕನು ಎಷ್ಟರವನು? ಶೆಕೆಮಿನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರ ಸೇವೆಯನ್ನು ಮಾಡಲಿ.29ಈ ಜನರ ಮೇಲೆ ನನಗೆ ಅಧಿಕಾರವಿದ್ದಿದ್ದರೆ ಅಬೀಮೆಲೆಕನನ್ನು ಓಡಿಸಿಬಿಡುತ್ತಿದ್ದೆನು>> ಎಂದು ಹೇಳಿ, <<ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ>> ಎಂದು ಕೊಚ್ಚಿಕೊಂಡನು.30ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ, ಕೋಪಗೊಂಡು ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ,31<<ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆಮಿನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ.32ಆದುದರಿಂದ ನೀನು ಈ ರಾತ್ರಿಯೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು. ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು. ಅವನೂ ಅವನ ಜೊತೆಯಲ್ಲಿರುವವರೂ33ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು>> ಎಂದು ಹೇಳಿಸಿದನು.34ಅಬೀಮೆಲೆಕನೂ, ಅವನ ಜನರೂ ರಾತ್ರಿಯಲ್ಲೇ ಹೊರಟು ಬಂದು ನಾಲ್ಕು ಗುಂಪಾಗಿ ಶೆಕೆಮಿನವರನ್ನು ಹೊಂಚಿಕಾಯುತ್ತಿದ್ದರು.35ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರಬಾಗಿಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು.36ಗಾಳನು ಅವರನ್ನು ಕಂಡು ಜೆಬುಲನಿಗೆ, <<ಇಗೋ, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ>> ಎಂದು ಹೇಳಿದನು. ಜೆಬುಲನು ಅವನಿಗೆ, <<ನೀನು ಬೆಟ್ಟದ ನೆರಳನ್ನು ನೋಡಿ ಜನರೆಂದು ಭಾವಿಸುತ್ತೀ>> ಅನ್ನಲು37ಅವನು ತಿರುಗಿ, <<ನೋಡು, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ; ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ>> ಅಂದನು.38ಆಗ ಜೆಬುಲನು ಅವನಿಗೆ, <<ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿಯಲ್ಲಾ; ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ>> ಎಂದು ಹೇಳಿದನು.39ಗಾಳನು ಶೆಕೆಮಿನವರ ನಾಯಕನಾಗಿ ಹೊರಟು ಅಬೀಮೆಲೆಕನೊಡನೆ ಕಾದಾಡಿದನು.40ಆದರೆ ಅಬೀಮೆಲೆಕನಿಗೆ ಬೆನ್ನು ತೋರಿಸಿ ಓಡಿಹೋಗಲು, ಅವನು ಇವನನ್ನು ಹಿಂದಟ್ಟಿದನು. ಊರುಬಾಗಿಲಿನವರೆಗೆ ಅನೇಕ ಮಂದಿ ಹತರಾಗಿ ಬಿದ್ದರು.41ಅನಂತರ ಅಬೀಮೆಲೆಕನು ಹೋಗಿ ಅರೂಮದಲ್ಲಿ ವಾಸಮಾಡಿದನು. ಇತ್ತ ಜೆಬುಲನು ಗಾಳನನ್ನೂ ಅವನ ಬಂಧುಗಳನ್ನೂ ಶೆಕೆಮಿನಿಂದ ಓಡಿಸಿಬಿಟ್ಟನು.42ಮರುದಿನ ಜನರು ಬೈಲಿಗೆ ಹೊರಟು ಬಂದರು;43ಇದು ಅಬೀಮೆಲೆಕನಿಗೆ ಗೊತ್ತಿದ್ದುದರಿಂದ ಅವನು ತನ್ನ ಜನರನ್ನು ಮೂರು ಗುಂಪು ಮಾಡಿ ಅವರನ್ನು ಕರೆದುಕೊಂಡು ಬಂದು ಹೊಲಗಳಲ್ಲಿ ಹೊಂಚಿ ನೋಡುತ್ತಿದ್ದನು. ಜನರು ಪಟ್ಟಣದಿಂದ ಹೊರಟು ಬರುವುದನ್ನು ಇವನು ಕಾಣುತ್ತಲೇ, ಅಲ್ಲಿಂದ ಎದ್ದು ಅವರನ್ನು ಹೊಡೆದನು.44ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿ ಬಂದು ಊರು ಬಾಗಿಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆಮಿನವರ ಮೇಲೆ ಬಿದ್ದು ಅವರನ್ನು ಹತಮಾಡಿದರು.45ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ, ಪಟ್ಟಣವನ್ನು ಸ್ವಾಧೀನಮಾಡಿಕೊಂಡು, ಅದರ ಜನರನ್ನೆಲ್ಲಾ ಸಂಹರಿಸಿ, ಊರನ್ನು ಕೆಡವಿಬಿಟ್ಟು, ಅಲ್ಲಿ ಉಪ್ಪನ್ನು ಎರಚಿಬಿಟ್ಟನು.46ಶೆಕೆಮಿನ ಕೋಟೆಯವರು ಇದನ್ನು ಕೇಳಿ ಏಲ್‌ಬೆರೀತೆ ಎಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು.47ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬುದು ಅಬೀಮೆಲೆಕನಿಗೆ ಗೊತ್ತಾದಾಗ48ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೋನ್ ಗುಡ್ಡವನ್ನೇರಿ ತನ್ನವರಿಗೆ, <<ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ>> ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಳ್ಳಲು49ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.ಅಬೀಮೆಲೆಕನ ಮರಣ
50ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ ಮುತ್ತಿಗೆಹಾಕಿ ಅದನ್ನು ಹಿಡಿದನು.51ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ, ಅದರೊಳಗೆ ಹೊಕ್ಕು, ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು.52ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು,53ಒಬ್ಬ ಸ್ತ್ರೀಯು ಮೇಲಿನಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ, ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು.54ಅವನು ಕೂಡಲೆ ತನ್ನ ಆಯುಧ ಹೊರುವವನನ್ನು ಕರೆದು ಅವನಿಗೆ, <<ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ನಾನು ಹೆಂಗಸಿನ ಕೈಯಿಂದ ಸತ್ತನೆಂದು ಜನರು ಹೇಳಾರು>> ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.55ಅಬೀಮೆಲೆಕನು ಸತ್ತು ಹೋದದ್ದನ್ನು ಕಂಡು ಇಸ್ರಾಯೇಲರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.56ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ, ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದನು.57ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.
10ತೋಲಾ
1ಅಬೀಮೆಲೆಕನ ಮರಣದ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ, ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸಿವುದಕ್ಕೋಸ್ಕರ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು.2ಇಪ್ಪತ್ತಮೂರು ವರ್ಷಗಳವರೆಗೆ ಇಸ್ರಾಯೇಲರನ್ನು ಪಾಲಿಸಿದ ನಂತರ, ಅವನು ಸತ್ತು ಶಾಮೀರಿನಲ್ಲಿ ಹೂಣಲ್ಪಟ್ಟನು.ಯಾಯೀರ್
3ತೋಲನ ಮರಣದ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು.4ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.5ಯಾಯೀರನು ಸತ್ತು ಕಾಮೋನಿನಲ್ಲಿ ಹೂಣಲ್ಪಟ್ಟನು.ಅಮ್ಮೋನಿಯರ ಕಾಟವು
6ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.7ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.8ಇವರು ಅಂದಿನಿಂದ ಹದಿನೆಂಟು ವರ್ಷಗಳ ವರೆಗೆ ಯೊರ್ದನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಾಯೇಲರನ್ನು ಬಹಳವಾಗಿ ಪೀಡಿಸುತ್ತಾ, ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮೋರಿಯರದಾಗಿತ್ತು.9ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ, ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲರಿಗೆ ಬಹಳ ಕಷ್ಟವಾಯಿತು.10ಆಗ ಅವರು ಯೆಹೋವನಿಗೆ, <<ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ>> ಎಂದು ಮೊರೆಯಿಟ್ಟರು.11ಆತನು ಅವರಿಗೆ, << ಐಗುಪ್ತ, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ ಇವೇ12ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವರಿಂದ ನಿಮ್ಮನ್ನು ಬಿಡಿಸಿದರೂ13 ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.14 ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ>> ಅಂದನು.15ಅವರು ತಿರುಗಿ ಯೆಹೋವನಿಗೆ, <<ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು>> ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು.16 ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು.17ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಳ್ಳಲು ಇಸ್ರಾಯೇಲರು ಸೇರಿ ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.18ಗಿಲ್ಯಾದಿನ ಜನರೂ ಅಧಿಪತಿಗಳೂ, <<ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನು ಯಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡುವೆವು>> ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
11ಗಿಲ್ಯಾದಿನವರ ನಾಯಕನಾದ ಯೆಫ್ತಾಹ
1ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರಮಿಯಾಗಿದ್ದನು. ಅವನು ಗಿಲ್ಯಾದನಿಂದ ಒಬ್ಬ ವೇಶ್ಯೆಗೆ ಹುಟ್ಟಿದವನು.2ಗಿಲ್ಯಾದನಿಗೆ ಹೆಂಡತಿಗೂ ಮಕ್ಕಳು ಹುಟ್ಟಿದ್ದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, <<ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು>> ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.3ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು.4ಸ್ವಲ್ಪಕಾಲದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಅವರ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.5ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರುವುದಕ್ಕಾಗಿ ಅಲ್ಲಿಗೆ ಹೋದರು.6ಅವರು ಅವನಿಗೆ, <<ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು>> ಎಂದು ಬೇಡಿಕೊಂಡರು.7ಅವನು ಅವರಿಗೆ, <<ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಓಡಿಸಿಬಿಟ್ಟವರು ನೀವೇ ಅಲ್ಲವೋ? ನಿಮಗೆ ಕಷ್ಟ ಬಂದಾಗ ನನ್ನ ಬಳಿಗೆ ಯಾಕೆ ಬಂದಿರಿ?>> ಎನ್ನಲು8ಅವರು, <<ಆದುದರಿಂದಲೇ ಈಗ ತಿರುಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವುದಾದರೆ ಗಿಲ್ಯಾದಿನವರಿಗೆಲ್ಲಾ ನೀನೇ ನಾಯಕನಾಗಿರುವಿ>> ಎಂದು ಹೇಳಿದರು.9ಆಗ ಯೆಪ್ತಾಹನು ಅವರಿಗೆ, <<ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವುದಕ್ಕೋಸ್ಕರ ಕರೆದುಕೊಂಡು ಹೋಗುವಲ್ಲಿ ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ?>> ಎಂದು ಕೇಳಲು10ಅವರು ಅವನಿಗೆ, <<ಹಾಗೆಯೇ ಮಾಡುವೆವು; ನಮ್ಮಿಬ್ಬರ ಈ ಮಾತುಗಳಿಗೆ ಯೆಹೋವನೇ ಸಾಕ್ಷಿ>> ಎಂದು ಉತ್ತರಕೊಟ್ಟರು.11ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಜನರು ಅವನನ್ನು ಅಧಿಪತಿಯನ್ನಾಗಿಯೂ, ನಾಯಕನನ್ನಾಗಿಯೂ ನೇಮಿಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.12ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಏನು ಕಾರಣ?>> ಎಂದು ಕೇಳಿದನು.13ಆ ಅರಸನು ದೂತರಿಗೆ, << ಇಸ್ರಾಯೇಲರು ಐಗುಪ್ತದಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್ ಮತ್ತು ಯೊರ್ದನ್ ಹೊಳೆಗಳವರೆಗೂ ಇದ್ದ ನನ್ನ ದೇಶವನ್ನು ವಶಪಡಿಸಿಕೊಂಡರಲ್ಲಾ; ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು>> ಎಂದು ಹೇಳಿ ಕಳುಹಿಸಿದನು.14ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,15<<ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಾಯೇಲರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ.16ಅವರು ಐಗುಪ್ತವನ್ನು ಬಿಟ್ಟನಂತರ ಅರಣ್ಯದಲ್ಲಿ ಸಂಚರಿಸಿ, ಕೆಂಪು ಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.17ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, <ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ಅಪ್ಪಣೆಯಾಗಬೇಕು> ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನೂ ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ಉಳಿದುಕೊಂಡರು.18ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳಿದುಕೊಂಡರು. ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.19ತರುವಾಯ ಅವರು ಹೆಷ್ಬೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, <ನಿನ್ನ ದೇಶವನ್ನು ದಾಟಿ ನಮ್ಮ ದೇಶಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು> ಎಂದು ಅವನನ್ನು ಬೇಡಿಕೊಂಡರು.20ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.21ಇಸ್ರಾಯೇಲರ ದೇವರಾದ ಯೆಹೋವನು ಸೀಹೋನನನ್ನೂ, ಅವನ ಜನರೆಲ್ಲರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು, ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.22ಹೀಗೆ ಇಸ್ರಾಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ, ಅರಣ್ಯದಿಂದ ಯೊರ್ದನಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು.23ಇಸ್ರಾಯೇಲರ ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?24ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಾಗಿದೆ.25ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಇಸ್ರಾಯೇಲರೊಡನೆ ಎಂದಾದರೂ ವಿವಾದಮಾಡಿದನೋ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?26ಇಸ್ರಾಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ, ಅವುಗಳ ಗ್ರಾಮಗಳಲ್ಲಿಯೂ, ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ. ಇಷ್ಟು ದಿನಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?27ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯ ಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲರ ಮತ್ತು ಅಮ್ಮೋನಿಯರ ಮಧ್ಯದಲ್ಲಿ ನ್ಯಾಯತೀರಿಸಲಿ>> ಎಂದು ಹೇಳಿಸಿದನು.28ಆದರೆ ಯೆಪ್ತಾಹನು ಹೇಳಿಕಳುಹಿಸಿದ ಮಾತುಗಳಿಗೆ ಅಮ್ಮೋನಿಯರ ಅರಸನು ಕಿವಿಗೊಡಲಿಲ್ಲ.ಯೆಪ್ತಾಹನು ಅಮ್ಮೋನಿಯರನ್ನು ಸೋಲಿಸಿದ್ದು
29ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಯಾದಿನ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.30 ಇದಲ್ಲದೆ ಅವನು ಯೆಹೋವನಿಗೆ, <<ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ31ನಾನು ಸುರಕ್ಷಿತವಾಗಿ ಮನೆಗೆ ಸೇರುವಾಗ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನನ್ನ ಮನೆಯ ಬಾಗಿಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಯಜ್ಞವಾಗಿ ಅರ್ಪಿಸುವೆನು>> ಎಂದು ಹರಕೆಮಾಡಿದನು.32ಯೆಪ್ತಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು.33ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಆಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿಬಿಟ್ಟನು. ಹೀಗೆ ದೊಡ್ಡ ಜಯವಾಗಿ ಅಮ್ಮೋನಿಯರು ಇಸ್ರಾಯೇಲರ ಮುಂದೆ ತಗ್ಗಿಸಲ್ಪಟ್ಟರು.ಯೆಪ್ತಾಹನು ಮಗಳು
34ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.35ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, <<ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು>> ಎಂದು ಕೂಗಿಕೊಳ್ಳಲು36ಆಕೆಯು ಅವನಿಗೆ, <<ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದ್ದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು>> ಎಂದಳು.37ಆಕೆಯು ತಿರುಗಿ ತನ್ನ ತಂದೆಗೆ, <<ನನ್ನ ಬಿನ್ನಹವನ್ನು ಲಾಲಿಸು; ಎರಡು ತಿಂಗಳುಗಳ ಕಾಲ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಬೆಟ್ಟದ ಪ್ರದೇಶಗಳಿಗೆ ಹೋಗಿ, ನನ್ನ ಕನ್ಯಾವಸ್ಥೆಗೋಸ್ಕರ ಗೋಳಾಡುವೆನು>> ಎಂದಳು.38ಅವನು, <<ಎರಡು ತಿಂಗಳ ತನಕ ಹೋಗಿ ಬಾ>> ಎಂದು ಕಳುಹಿಸಿದನು. ಆಕೆಯು ಸಖಿಯರ ಸಹಿತವಾಗಿ ಬೆಟ್ಟದ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗೋಸ್ಕರ ಗೋಳಾಡಿದಳು.39ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.40ಇಸ್ರಾಯೇಲ್ಯರ ಹೆಣ್ಣುಮಕ್ಕಳು ಪ್ರತಿವರ್ಷದಲ್ಲಿಯೂ ನಾಲ್ಕು ದಿನ ಗಿಲ್ಯಾದ್ಯನಾದ ಯೆಪ್ತಾಹನ ಮಗಳನ್ನು ವರ್ಣಿಸುತ್ತಾರೆ. ಇದು ಅವರಲ್ಲಿ ಒಂದು ಪದ್ಧತಿ.
12ಯೆಪ್ತಾಹನು ಎಫ್ರಾಯೀಮ್ಯರನ್ನು ಸೋಲಿಸಿದ್ದು
1ಎಫ್ರಾಯೀಮ್ಯರು ಒಟ್ಟಿಗೆ ಸೇರಿಕೊಂಡು ಯೊರ್ದನ್ ನದಿಯನ್ನು ದಾಟಿ ಉತ್ತರದಿಕ್ಕಿನಲ್ಲಿರುವ ಚಾಫೋನಿಗೆ ಹೋಗಿ ಯೆಪ್ತಾಹನಿಗೆ, <<ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ>> ಅಂದರು.2ಆಗ ಅವನು ಅವರಿಗೆ, <<ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ.3ನೀವು ಸಹಾಯಮಾಡುವುದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು. ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?>> ಎಂದು ಉತ್ತರಿಸಿ,4ಗಿಲ್ಯಾದಿನವರೆಲ್ಲರನ್ನೂ ಸೇರಿಸಿಕೊಂಡು ಎಫ್ರಾಯೀಮ್ಯರಿಗೆ ವಿರೋಧವಾಗಿ ಯುದ್ಧಕ್ಕೆ ನಿಂತನು. ಆಗ ಎಫ್ರಾಯೀಮ್ಯರು <<ಗಿಲ್ಯಾದ್ಯರಾದ ನೀವು, ನಮ್ಮ ಮತ್ತು ಮನಸ್ಸೆಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿ ಬಂದಿದ್ದೀರಿ>> ಎಂದು ಎಫ್ರಾಯೀಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಕೋಪಗೊಂಡು ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು.5ಇದಲ್ಲದೆ ಅವರು ಎಫ್ರಾಯೀಮಿಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿಸಿರಿ ಎಂದು ಅವರನ್ನು ಕೇಳಿದರೆ ಅವರು, <<ನೀನು ಎಫ್ರಾಯೀಮ್ಯನೋ>> ಎಂದು ಕೇಳುವರು.6ಅವನು ಅಲ್ಲವೆಂದರೆ ಅವನಿಗೆ, <<ನೀನು ಷಿಬ್ಬೋಲೆತ್ ಎಂದು ಹೇಳು>> ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ (ಕಾಲ್ನಡಿಗೆಯಿಂದ ದಾಟಬಹುದಾದ ನಿರುಳ್ಳಸ್ಥಳ) ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಲ್ವತ್ತೆರಡು ಸಾವಿರ ಜನರು ಹತರಾದರು.7ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಾಯೇಲ್ಯರನ್ನು ಆರು ವರ್ಷ ಪಾಲಿಸಿದ ನಂತರ ಸತ್ತನು; ಅವನ ಶವವನ್ನು ಗಿಲ್ಯಾದಿನ ಒಂದು ಪಟ್ಟಣದಲ್ಲಿ ಸಮಾಧಿ ಮಾಡಿದರು.ಇಬ್ಚಾನ್
8ಯೆಪ್ತಾಹನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲರ ನ್ಯಾಯಪಾಲಕನಾದನು.9ಅವನಿಗೆ ಮೂವತ್ತು ಮಂದಿ ಗಂಡುಮಕ್ಕಳೂ, ಮೂವತ್ತು ಮಂದಿ ಹೆಣ್ಣುಮಕ್ಕಳೂ ಇದ್ದರು. ತನ್ನ ಹೆಣ್ಣುಮಕ್ಕಳನ್ನು ಬೇರೆಯವರಿಗೆ ಕೊಟ್ಟು, ಗಂಡುಮಕ್ಕಳಿಗೋಸ್ಕರ ಹೊರಗಿನ ಮೂವತ್ತು ಮಂದಿ ಕನ್ಯೆಯರನ್ನು ತಂದನು.10ಇವನು ಇಸ್ರಾಯೇಲ್ಯರನ್ನು ಏಳು ವರ್ಷ ಪಾಲಿಸಿದನು. ಇಬ್ಚಾನನು ಸತ್ತ ಮೇಲೆ ಅವನ ಶವವನ್ನು ಬೇತ್ಲೆಹೇಮಿನಲ್ಲಿ ಸಮಾಧಿಮಾಡಿದರು.ಏಲೋನ್
11ಇವನ ತರುವಾಯ ಜೆಬುಲೂನ್ಯನಾದ ಏಲೋನನು ಇಸ್ರಾಯೇಲರ ಪಾಲಕನಾಗಿ ಹತ್ತು ವರ್ಷಗಳ ಕಾಲ ಅವರನ್ನು ಪಾಲಿಸಿದ ನಂತರ ಮರಣಹೊಂದಿದನು.12ಅವನ ಶವವನ್ನು ಜೆಬುಲೂನ್ ದೇಶದ ಅಯ್ಯಾಲೋನಿನಲ್ಲಿ ಸಮಾಧಿಮಾಡಿದರು.ಅಬ್ದೋನ್
13ಇವನ ತರುವಾಯ ಪಿರಾತೋನಿನವನೂ, ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರ ಪಾಲಕನಾದನು.14ಇವನಿಗೆ ನಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರನ್ನು ಎಂಟು ವರ್ಷಗಳ ಕಾಲ ಪಾಲಿಸಿದ ನಂತರ ಮರಣಹೊಂದಿದನು;15ಅವನ ಶವವನ್ನು ಎಫ್ರಾಯೀಮ್ ದೇಶದಲ್ಲಿ ಅಮಾಲೇಕ್ಯರ ಬೆಟ್ಟದ ಮೇಲಿರುವ ಪಿರಾತೋನಿನಲ್ಲಿ ಸಮಾಧಿಮಾಡಿದರು.
13ಸಂಸೋನನ ಜನನ
1ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದುದರಿಂದ ಆತನು ಅವರನ್ನು ನಲ್ವತ್ತು ವರ್ಷಗಳ ಕಾಲ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.2 ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದರಿಂದ ಅವನಿಗೆ ಮಕ್ಕಳಿರಲಿಲ್ಲ.3ಒಂದಾನೊಂದು ದಿನ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ, <<ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ.4ಆದುದರಿಂದ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥಗಳನ್ನು ಊಟಮಾಡದಿರು.5ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು>> ಅಂದನು.6ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, <<ಒಬ್ಬ ದೇವರಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.7ಆದರೆ ನನಗೆ, <ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ; ಆದುದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವ ವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು> ಎಂದು ಹೇಳಿದನು>> ಅಂದಳು.8ಮಾನೋಹನು ಇದನ್ನು ಕೇಳಿ ಯೆಹೋವನಿಗೆ, <<ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ>> ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು.9ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವದೂತನು ಪುನಃ ಬಂದನು. ಆಕೆಯ ಗಂಡನಾದ ಮಾನೋಹನು ಅಲ್ಲಿರಲಿಲ್ಲ.10ಆದ್ದರಿಂದ ಆಕೆಯು ಬೇಗನೆ ಗಂಡನ ಬಳಿಗೆ ಹೋಗಿ, <<ಮೊನ್ನೆ ನನಗೆ ಪ್ರತ್ಯಕ್ಷನಾದ ಪುರುಷನು ತಿರುಗಿ ಬಂದಿದ್ದಾನೆ>> ಎಂದು ತಿಳಿಸಲು11ಅವನೆದ್ದು ಹೆಂಡತಿಯೊಡನೆ ಬಂದು ಆ ಪುರುಷನಿಗೆ, <<ಮೊನ್ನೆ ಈಕೆಯೊಡನೆ ಮಾತನಾಡಿದವನು ನೀನೋ>> ಎಂದು ಕೇಳಲು ಅವನು, <<ಹೌದು, ನಾನೇ>> ಅಂದನು.12ಆಗ ಮಾನೋಹನು, <<ನೀನು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ಬೆಳೆಸಬೇಕು>> ಎಂದು ಕೇಳಲು13ಯೆಹೋವನ ದೂತನು ಮಾನೋಹನಿಗೆ, <<ನಾನು ಹೇಳಿದ್ದನ್ನೆಲ್ಲಾ ಈಕೆಯು ಜಾಗರೂಕತೆಯಿಂದ ಕೈಕೊಳ್ಳಲಿ.14ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಕೊಳ್ಳಲಿ>> ಅಂದನು.15ಮತ್ತು ಮಾನೋಹನು ಯೆಹೋವನ ದೂತನನ್ನು, <<ನಾವು ನಿನಗೋಸ್ಕರ ಒಂದು ಹೋತಮರಿಯನ್ನು ಪಕ್ವಮಾಡಿ ತರುವವರೆಗೆ ದಯವಿಟ್ಟು ಇಲ್ಲೇ ನಿಲ್ಲಬೇಕು>> ಎಂದು ಬೇಡಿಕೊಂಡನು.16ಯೆಹೋವನ ದೂತನು ಮಾನೋಹನಿಗೆ, <<ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಯಜ್ಞಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸಮರ್ಪಿಸು>> ಅಂದನು. ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.17ಆದ್ದರಿಂದ ಅವನು ಆ ದೂತನನ್ನು, <<ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿನ್ನ ಹೆಸರೇನು>> ಎಂದು ಕೇಳಿದನು.18ಯೆಹೋವನ ದೂತನು, <<ನನ್ನ ಹೆಸರನ್ನು ಕೇಳುವುದೇಕೆ? ಅದು ಆಶ್ಚರ್ಯಕರವಾದದ್ದು>> ಅಂದನು.19ಮಾನೋಹನು ಹೋತಮರಿಯನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಯೆಹೋವನಿಗೆ ಸಮರ್ಪಿಸಿದನು. ಮಾನೋಹನೂ ಅವನ ಹೆಂಡತಿಯೂ ನೋಡುತ್ತಿರುವಾಗಲೇ ಯೆಹೋವನ ದೂತನು ಆಶ್ಚರ್ಯವನ್ನು ನಡಿಸಿದನು.20ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲುಬಿದ್ದರು.21ಯೆಹೋವನ ದೂತನು ಮಾನೋಹನಿಗೂ ಅವನ ಹೆಂಡತಿಗೂ ಮತ್ತೆ ಕಾಣಿಸಲಿಲ್ಲ. ಆಗ ಮಾನೋಹನು ಆತನು ಯೆಹೋವನ ದೂತನೆಂದು ತಿಳಿದು22ತನ್ನ ಹೆಂಡತಿಗೆ, <<ನಾವು ಸಾಯುವುದು ನಿಜ, ದೇವರನ್ನು ಕಣ್ಣಾರೆ ಕಂಡೆವಲ್ಲಾ>> ಅಂದನು.23ಆದರೆ ಆಕೆಯು ಅವನಿಗೆ, <<ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ, ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ, ಹೇಳುತ್ತಿರಲಿಲ್ಲ>> ಅಂದಳು.24ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನೆಂದು ಹೆಸರಿಟ್ಟಳು. ಹುಡುಗನು ದೊಡ್ಡವನಾದನು. ಯೆಹೋವನ ಆಶೀರ್ವಾದವು ಅವನ ಮೇಲಿತ್ತು.25ಇದಲ್ಲದೆ ಅವನು ಚೊರ್ಗಕ್ಕೂ, ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿತು.
14ಸಂಸೋನನ ವಿವಾಹವೂ ಒಗಟೂ
1 ಸಂಸೋನನು ಗಟ್ಟಾ ಇಳಿದು ತಿಮ್ನಾ ಊರಿಗೆ ಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿ, ತಿರುಗಿ ತಂದೆತಾಯಿಗಳ ಬಳಿಗೆ ಬಂದು2ಅವರಿಗೆ, <<ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ>> ಎಂದು ಹೇಳಿದನು.3ಆಗ ಅವರು ಅವನಿಗೆ, <<ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ಮದುವೆ ಮಾಡಿಕೊಳ್ಳಬೇಕೆಂದಿರುತ್ತೀಯಲ್ಲಾ; ನಿನ್ನ ಬಂಧುಗಳಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವುದಿಲ್ಲವೋ?>> ಎಂದು ಕೇಳಲು ಅವನು, <<ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ>> ಅಂದನು.4ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.5ಸಂಸೋನನು ತನ್ನ ತಂದೆತಾಯಿಗಳ ಸಹಿತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿ ತೋಟಗಳ ಬಳಿಗೆ ಬಂದಾಗ, ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನೆದುರಿಗೆ ಬಂದಿತು.6ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.7ಅನಂತರ ಅವನು ಊರೊಳಗೆ ಹೋಗಿ ಆ ಸ್ತ್ರೀಯನ್ನು ಮಾತನಾಡಿಸಿ ಆಕೆಯನ್ನು ಮೆಚ್ಚಿಕೊಂಡನು.8ಕೆಲವು ದಿನಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕೋಸ್ಕರ ತಿರುಗಿ ಆ ಊರಿಗೆ ಹೋಗುತ್ತಿದ್ದಾಗ ದಾರಿಯ ಸಮೀಪದಲ್ಲಿ ಬಿದ್ದಿದ್ದ ಸಿಂಹದ ಹೆಣವನ್ನು ನೋಡುವುದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ, ಜೇನನ್ನೂ ಕಂಡು,9ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಸತ್ತ ಸಿಂಹದ ದೇಹದಿಂದ ತಾನು ಜೇನು ತೆಗೆದುಕೊಂಡನೆಂದು ಅವರಿಗೆ ತಿಳಿಸಲಿಲ್ಲ.ಸಂಸೋನನ ಒಗಟು
10ಸಂಸೋನನ ತಂದೆಯು ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ದತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.11ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು.12ಸಂಸೋನನು ಇವರಿಗೆ, << ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.13ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ನಾರು ಬಟ್ಟೆಯ ನಿಲುವಂಗಿಗಳನ್ನು (ದುಪ್ಪಟಿಗಳನ್ನೂ), ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು>> ಅನ್ನಲು ಅವರು ಅವನಿಗೆ, <<ನಿನ್ನ ಒಗಟನ್ನು ಹೇಳು, ಕೇಳೋಣ>> ಎಂದು ಹೇಳಿದರು.14ಆಗ ಅವನು,<<ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು;
ಕ್ರೂರವಾದದ್ದರಿಂದ ಮಧುರವಾದದ್ದು ಹುಟ್ಟಿತು>>
ಎಂದು ಹೇಳಿದನು.
ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.
15ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, <<ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರೆಸಿದಿರೋ>> ಅಂದರು.16ಆಕೆಯು ಸಂಸೋನನ ಮುಂದೆ ಅಳುತ್ತಾ, <<ನೀನು ನನ್ನನ್ನು ಪ್ರೀತಿಸುವುದಿಲ್ಲ, ದ್ವೇಷಿಸುತ್ತೀಯಷ್ಟೆ; ನನ್ನ ಜನರಿಗೆ ಒಗಟನ್ನು ಹೇಳಿದ್ದೀ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ>> ಎಂದು ತೊಂದರೆಪಡಿಸಿದಳು. ಅವನು ಆಕೆಗೆ, <<ಅದನ್ನು ನನ್ನ ತಂದೆತಾಯಿಗಳಿಗೂ ಹೇಳಲಿಲ್ಲ; ನಿನಗೆ ಹೇಳುವೆನೋ?>> ಎಂದು ಉತ್ತರ ಕೊಟ್ಟನು.17ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.18ಅವರು ಏಳನೆಯ ದಿನ ಸೂರ್ಯ ಮುಳುಗುವುದಕ್ಕಿಂತ ಮೊದಲು ಅವನಿಗೆ,<<ಜೇನಿಗಿಂತ ಸಿಹಿಯಾದದ್ದು ಯಾವುದು?
ಸಿಂಹಕ್ಕಿಂತ ಬಲಿಷ್ಠವಾದದ್ದು ಯಾವುದು?>>
ಎಂದು ಹೇಳಲು ಅವನು,
<< ನೀವು ನನ್ನ ಕಡಸಿನಿಂದ ಉಳದೇ ಹೋಗಿದ್ದರೆ
ಒಗಟನ್ನು ಬಿಚ್ಚುವುದು ನಿಮ್ಮಿಂದಾಗುತ್ತಿರಲಿಲ್ಲ>> ಅಂದನು.
19ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು.20ಇತ್ತ ಸಂಸೋನನ ಹೆಂಡತಿಯನ್ನು ಆ ಮೂವತ್ತು ಮಂದಿಯಲ್ಲಿ ಅವನಿಗೆ ಸ್ನೇಹಿತನಾಗಿದ್ದವನಿಗೆ ಮದುವೆಮಾಡಿಕೊಟ್ಟರು.
15ಸಂಸೋನನು ಫಿಲಿಷ್ಟಿಯರ ಬೆಳೆಯನ್ನು ಹಾಳುಮಾಡಿದ್ದು
1ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವುದಕ್ಕೋಸ್ಕರ ಹೊರಟುಹೋಗಿ ಆಕೆಯ ತಂದೆಗೆ, <<ನಾನು ನನ್ನ ಹೆಂಡತಿಯ ಹತ್ತಿರ ಒಳಗಿನ ಕೋಣೆಗೆ ಹೋಗುತ್ತೇನೆ>> ಅಂದನು. ಅದಕ್ಕೆ ಅವನು, <<ಹೋಗಬಾರದು;2ನೀನು ನಿಜವಾಗಿ ಆಕೆಯನ್ನು ಹಗೆಮಾಡುತ್ತೀಯೆಂದು ತಿಳಿದು ಅವಳನ್ನು ನಿನ್ನ ಗೆಳೆಯರಲ್ಲೊಬ್ಬನಿಗೆ ಮದುವೆಮಾಡಿಕೊಟ್ಟೆನು. ಆಕೆಯ ತಂಗಿಯು ಆಕೆಗಿಂತ ಸುಂದರಿಯಾಗಿದ್ದಾಳಲ್ಲಾ; ಈಕೆಯು ನಿನಗಿರಲಿ>> ಅಂದನು.3ಆಗ ಸಂಸೋನನು, <<ಈ ಸಾರಿ ನಾನು ಫಿಲಿಷ್ಟಿಯರಿಗೆ ಕೇಡುಮಾಡುವುದಾದರೆ ತಪ್ಪು ನನ್ನದಲ್ಲ>> ಎಂದುಕೊಂಡು ಹೋಗಿ4ಮುನ್ನೂರು ನರಿಗಳನ್ನು ಹಿಡಿದು, ಬಾಲಕ್ಕೆ ಬಾಲವನ್ನು ಸೇರಿಸಿ ಕಟ್ಟಿ, ಅವುಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ, ಪಂಜುಗಳಿಗೆ ಬೆಂಕಿಹೊತ್ತಿಸಿ,5ಆ ನರಿಗಳನ್ನು ಫಿಲಿಷ್ಟಿಯರ ಹೊಲಗಳಲ್ಲಿ ಬಿಟ್ಟು, ಅವರ ತೆನೆಗೂಡುಗಳನ್ನೂ, ಇನ್ನೂ ಕೊಯ್ಯದೆ ಇದ್ದ ಬೆಳೆಯನ್ನೂ, ಎಣ್ಣೆಯ ಮರಗಳ ತೋಟಗಳನ್ನೂ ಸುಟ್ಟುಬಿಟ್ಟನು.6ಫಿಲಿಷ್ಟಿಯರು ಇದನ್ನು ಮಾಡಿದವರು ಯಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವನು ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಆಕೆಯನ್ನೂ, ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.7ಸಂಸೋನನು ಅವರಿಗೆ, <<ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿತೀರಿಸದೆ ಬಿಡುವುದಿಲ್ಲ>> ಎಂದು ಹೇಳಿ8ಅವರ ತೊಡೆ, ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿ, ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.ಸಂಸೋನನು ಲೇಹಿಯಲ್ಲಿ ಸಾವಿರ ಮಂದಿ ಫಿಲಿಷ್ಟಿಯರನ್ನು ಹೊಡೆದು ಸೋಲಿಸಿದ್ದು
9ಆಗ ಫಿಲಿಷ್ಟಿಯರು ಹೊರಟು ಯೆಹೂದಾ ಪ್ರಾಂತ್ಯದ ಲೆಹೀ ಎಂಬಲ್ಲಿಗೆ ಹೋಗಿ ಪಾಳೆಯಮಾಡಿಕೊಂಡರು.10ನೀವು ನಮಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದೇಕೆ ಎಂದು ಯೆಹೂದ್ಯರು ಅವರನ್ನು ಕೇಳಲು ಅವರು, <<ಸಂಸೋನನನ್ನು ಹಿಡಿದು ಕಟ್ಟಿ ಅವನು ನಮಗೆ ಮಾಡಿದಂತೆಯೇ ಅವನಿಗೂ ಮಾಡಬೇಕೆಂದು ಬಂದೆವು>> ಎಂದು ಉತ್ತರಕೊಟ್ಟರು.11ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, <<ಫಿಲಿಷ್ಟಿಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ?>> ಎಂದು ಕೇಳಲು ಅವನು, <<ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ>> ಅಂದನು.12ಅವರು, <<ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ>> ಅನ್ನಲು ಸಂಸೋನನು, <<ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ>> ಎಂದನು.13ಅದಕ್ಕೆ ಅವರು, <<ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ>> ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗುಡ್ಡದ ಮೇಲಿನಿಂದ ಕರತಂದರು.14ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಯೆಹೋವನ ಆತ್ಮವು ಅವನ ಮೇಲೆ ಬಂದದ್ದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.15ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿದಾಗಿತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಸಂಹರಿಸಿಬಿಟ್ಟು,
16<<ಕತ್ತೆಯ ದವಡೇ ಎಲುಬಿನಿಂದ ಸಾವಿರ ಜನರನ್ನು ಸಾಯಿಸಿದೆನು; ಕತ್ತೆಯ ದವಡೇ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು>> ಎಂದು ಹೇಳಿ, 17ತನ್ನ ಕೈಯಲ್ಲಿದ್ದ ಎಲುಬನ್ನು ಬೀಸಾಡಿದನು. ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು.18ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, <<ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ>> ಎಂದು ಮೊರೆಯಿಡಲು19ಆತನು ಲೇಹಿಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಅದನ್ನು ಕುಡಿದು ಪುನಃ ಚೈತನ್ಯಹೊಂದಿದನು. ಆದ್ದರಿಂದ ಅದಕ್ಕೆ ಏನ್ ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನ ವರೆಗೂ ಲೆಹೀಯಲ್ಲಿರುತ್ತದೆ.20ಫಿಲಿಷ್ಟಿಯರ ಪ್ರಾಬಲ್ಯದಲ್ಲಿ ಸಂಸೋನನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ವರೆಗೆ ಪಾಲಿಸಿದನು.
16ಸಂಸೋನನ ಪರಾಕ್ರಮ
1ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.2ಸಂಸೋನನು ಬಂದಿರುವುದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.3ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರು ಬಾಗಿಲಿನ ಕದಗಳನ್ನೂ, ಅದರ ಎರಡು ನಿಲುವುಪಟ್ಟಿಗಳನ್ನೂ, ಅಗುಳಿಗಳನ್ನೂ ಕಿತ್ತು, ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಪರ್ವತ ಶಿಖರದ ಮೇಲೆ ಇಟ್ಟನು.ಸಂಸೋನನು ದೆಲೀಲಳಿಂದ ನಾಶವಾದದ್ದು
4ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು.5ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, <<ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು>> ಎಂದು ಹೇಳಿದರು.6ದೆಲೀಲಳು ಸಂಸೋನನಿಗೆ, <<ನಿನಗೆ ಇಂಥ ಮಹಾ ಶಕ್ತಿ ಹೇಗೆ ಬಂದಿತು? ನಿನ್ನನ್ನು ಬಲವನ್ನು ಕುಂದಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸು>> ಅಂದಳು.7ಅವನು, <<ಹಸಿ ನಾರಿನ ಏಳು ಎಳೆಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು>> ಎಂದು ಹೇಳಿದನು.8ಫಿಲಿಷ್ಟಿಯ ಪ್ರಭುಗಳು ಅಂಥ ಹಸೀ ನಾರಿನ ಏಳು ಎಳೆಗಳನ್ನು ಅವಳಿಗೆ ತಂದುಕೊಟ್ಟರು.9ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ, <<ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು>> ಎಂದು ಕೂಗಿದಳು. ಅವನು ಬೆಂಕಿತಗುಲಿದ ಸೆಣಬಿನ ದಾರವನ್ನೋ ಎಂಬಂತೇ ಆ ಎಳೆಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು.10ದೆಲೀಲಳು ತಿರುಗಿ ಸಂಸೋನನಿಗೆ, <<ನೀನು ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸು>> ಎಂದಳು.11ಅವನು ಅವಳಿಗೆ, <<ಯಾವುದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯರಂತಾಗುವೆನು>> ಅಂದನು.12ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ, ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, <<ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ>> ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.13ಆಗ ದೆಲೀಲಳು ಸಂಸೋನನಿಗೆ <<ನೀನು ತಿರುಗಿ ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂದು ತಿಳಿಸು>> ಅನ್ನಲು ಅವನು, <<ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯಿದರೆ ಸಾಕು>> ಎಂದು ಹೇಳಿದನು.14ಅವಳು ಅವನ ತಲೆಕೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ, <<ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ>> ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚೆತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.15ಆಕೆಯು ತಿರುಗಿ ಅವನಿಗೆ, <<ನನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳುವೇ? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರು ಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾ ಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ>> ಅಂದಳು.16ಇದಲ್ಲದೆ ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವುದು ಒಳ್ಳೆಯದು ಎನ್ನುವಷ್ಟು ಬೇಸರವಾಯಿತು.17ಆಗ ಅವನು, <<ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು>> ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.18ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, <<ಇದೊಂದು ಸಾರಿ ಬನ್ನಿರಿ: ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ>> ಎಂದು ಹೇಳಿ, ಕರೆಕಳುಹಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.19ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು,20ಆಗ ಅವಳು, <<ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ>> ಎಂದು ಕೂಗಲು ಅವನು ಎಚ್ಚೆತ್ತು, ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.21ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.22ಅಷ್ಟರಲ್ಲಿ ಅವನ ತಲೆಯ ಕೂದಲುಗಳು ಬೆಳೆಯ ತೊಡಗಿದವು.ಸಂಸೋನನ ಮರಣ
23ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು.24ಜನರು ಸಂಸೋನನನ್ನು ನೋಡಿದಾಗ,<<ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ ಈ ಶತ್ರುವನ್ನು
ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ>> ಎಂದು ಹಾಡು ಹಾಡಿ ಸಂತೋಷಿಸಿದರು.
25ಅವರು ಸಂಭ್ರಮದಲ್ಲಿದ್ದಾಗ, <<ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ>> ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು.26ಆಗ ಸಂಸೋನನು ತನ್ನನ್ನು ಕೈಹಿಡಿದು ನಡೆಸುವ ಹುಡುಗನಿಗೆ, <<ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ>> ಅಂದನು.27ಆ ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿದು ಹೋಗಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.28ಆಗ ಸಂಸೋನನು ಯೆಹೋವನಿಗೆ, <<ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು>> ಎಂದು ಮೊರೆಯಿಟ್ಟು,29ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ, ಇನ್ನೊಂದನ್ನು ಎಡಗೈಯಿಂದಲೂ ಹಿಡಿದು, ಅವುಗಳನ್ನು ಒತ್ತಿ,30<<ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು>> ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆಗ ಅ ಕಟ್ಟಡವು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಾಗಿತ್ತು.31ಅವನ ಬಂಧುಗಳೂ, ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆಯಾದ ಮಾನೋಹನ ಸಮಾಧಿಯಲ್ಲಿ ಹೂಣಿಟ್ಟರು. ಅವನು ಇಸ್ರಾಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದ್ದನು.
17ಮೀಕನ ಮನೆಯ ವಿಗ್ರಹ
1ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕನೆಂಬ ಒಬ್ಬ ಮನುಷ್ಯನಿದ್ದನು. ಅವನು ಒಂದು ದಿನ ತನ್ನ ತಾಯಿಗೆ, <<ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ;2ಇಗೋ, ಆ ಸಾವಿರದ ನೂರು ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು>> ಎಂದು ಹೇಳಿದನು. ಆಕೆಯು, <<ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ>> ಅಂದಳು.3ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು, <<ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು>> ಎಂದು ಹೇಳಿ,4ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು.5ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ, ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು, ತನ್ನ ಮಕ್ಕಳಲ್ಲಿ ಒಬ್ಬನನ್ನು ಅರ್ಚಕ ಸೇವೆಗಾಗಿ ಪ್ರತಿಷ್ಠಿಸಿದನು.6ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆದುಕೊಳ್ಳುತ್ತಿದ್ದನು.7ಯೆಹೂದದ ಬೇತ್ಲೆಹೇಮಿನವನೂ, ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿಯು ಉಪಜೀವನಕ್ಕೆ ಅನುಕೂಲವಾಗುವಂತೆ8ವಾಸಮಾಡಲು ತನ್ನ ಸ್ವಂತ ಊರನ್ನು ಬಿಟ್ಟು, ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದನು.9<<ನೀನು ಎಲ್ಲಿಂದ ಬಂದಿ>> ಎಂದು ಮೀಕನು ಅವನನ್ನು ಕೇಳಲು ಅವನು, <<ನಾನು ಯೆಹೂದದ ಬೇತ್ಲೆಹೇಮಿನವನಾದ ಲೇವಿಯನು; ಉಪಜೀವನಕ್ಕೆ ಅನುಕೂಲವಾದ ವಾಸಸ್ಥಳವನ್ನು ಹುಡುಕಿಕೊಂಡು ಹೊರಟಿದ್ದೇನೆ>> ಎಂದು ಉತ್ತರಕೊಟ್ಟನು.10ಮೀಕನು ಅವನಿಗೆ, <<ನೀನು ನಮ್ಮಲ್ಲಿರು; ನಮಗೆ ತಂದೆಯೂ, ಯಾಜಕನೂ ಆಗು. ನಿನಗೆ ವರ್ಷಕ್ಕೆ ಹತ್ತು ಬೆಳ್ಳಿ ನಾಣ್ಯಗಳನ್ನೂ, ಬಟ್ಟೆಯನ್ನೂ, ಆಹಾರವನ್ನೂ ಕೊಡುತ್ತೇನೆ>> ಅನ್ನಲು11ಆ ಲೇವಿಯನು ಒಪ್ಪಿಕೊಂಡು ಅಲ್ಲೇ ವಾಸಮಾಡಿದನು; ಹೀಗೆ ಆ ಯೌವನಸ್ಥನು ಅವನ ಮಕ್ಕಳಲ್ಲೊಬ್ಬನಂತಾದನು.12ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕಸೇವೆಗೋಸ್ಕರ ಪ್ರತಿಷ್ಠಿಸಿ ತನ್ನ ಮನೆಯಲ್ಲಿಟ್ಟುಕೊಂಡು,13<<ಒಬ್ಬ ಲೇವಿಯು ನನ್ನ ಮನೆಯಲ್ಲಿ ಯಾಜಕನಾಗಿರುವುದರಿಂದ ಯೆಹೋವನು ನನ್ನನ್ನು ಆಶೀರ್ವದಿಸುವನೆಂದು ಬಲ್ಲೆನು>> ಅಂದುಕೊಂಡನು.
18ದಾನ್ಯರು ಮತ್ತು ಮೀಕನು
1ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ದಾನ್ ಕುಲದವರಿಗೆ ಆ ವರೆಗೂ ಇಸ್ರಾಯೇಲರಲ್ಲಿ ಸ್ವತ್ತು ದೊರಕಿರಲಿಲ್ಲ, ಅವರು ತಮಗೋಸ್ಕರ ವಾಸಸ್ಥಳವನ್ನು ಹುಡುಕುತ್ತಿದ್ದರು.2ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, <<ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ>> ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.3ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತನಾಡುವುದನ್ನು ಕೇಳಿ, ಗುರುತುಹಿಡಿದು, ಅವನ ಬಳಿಗೆ ಹೋಗಿ, <<ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತೀ? ಏನು ಸಿಕ್ಕುತ್ತದೆ>> ಎಂದು ಅವನನ್ನು ಕೇಳಲು ಅವನು,4ಮೀಕನು ತನಗೆ ಇಂಥಿಂಥವುಗಳನ್ನು ಸಂಬಳವಾಗಿ ಕೊಡುತ್ತಾನೆಂದೂ, ತಾನು ಅವನ ಯಾಜಕನಾಗಿದ್ದೇನೆಂದೂ ಹೇಳಿದನು.5ಆಗ ಅವರು ಅವನಿಗೆ, <<ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು>> ಎಂದು ಬೇಡಿಕೊಳ್ಳಲು6ಅವನು, <<ಸಮಾಧಾನದಿಂದ ಹೋಗಿರಿ; ಯೆಹೋವನು ನಿಮ್ಮ ಪ್ರಯಾಣವನ್ನು ಕಟಾಕ್ಷಿಸುವನು>> ಅಂದನು.7ಆ ಐದು ಮಂದಿ ಹೊರಟು ಲಯಿಷಿಗೆ ಬಂದು, ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಒಡನಾಟವಿಲ್ಲದವರು ಎಂಬುದನ್ನು ತಿಳಿದುಕೊಂಡು8ಹಿಂದಿರುಗಿ ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿರುವ ತಮ್ಮ ಬಂಧುಗಳ ಬಳಿಗೆ ಬಂದರು. ಅವರ ಬಂಧುಗಳು, <<ನೀವು ಯಾವ ವರ್ತಮಾನ ತಂದಿದ್ದೀರಿ>> ಎಂದು ಅವರನ್ನು ಕೇಳಲು9ಅವರು, <<ಏಳಿರಿ, ಅವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇಕೆ? ತಡಮಾಡದೆ ಹೊರಡಿರಿ; ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳೋಣ.10ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ, ಅವರ ದೇಶವು ಬಹು ವಿಸ್ತಾರವಾಗಿದೆ ಎಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲಿ ಸಿಕ್ಕುವುದಿಲ್ಲ>> ಅಂದರು.11ಆಗ ಚೊರ್ಗಾ ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧ ಸನ್ನದ್ಧರಾಗಿ ಹೊರಟು,12ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿರುತ್ತದೆ.13ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು.14ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, <<ಈ ಗ್ರಾಮದಲ್ಲಿ ಒಂದು ಏಫೋದೂ, ದೇವತಾಪ್ರತಿಮೆಗಳೂ, ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬುದು ನಿಮಗೆ ಗೊತ್ತುಂಟೋ?15ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ>> ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸ ತೊಡಗಿದರು.16ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು.17ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ, ಆ ಐದು ಮಂದಿ ಮನೆಯನ್ನು ಹೊಕ್ಕು, ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ, ಏಫೋದನ್ನೂ, ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.18ಅವರು ಮೀಕನ ಮನೆಯನ್ನು ಹೊಕ್ಕು ಅವುಗಳನ್ನು ತೆಗೆದುಕೊಂಡು ಬರುವಾಗ ಯಾಜಕನು ಅದನ್ನು ಕಂಡು ಅವರಿಗೆ, <<ನೀವು ಮಾಡಿದ್ದೇನು>> ಅಂದನು.19ಅವರು ಅವನಿಗೆ, <<ಸುಮ್ಮನಿರು; ಬಾಯಿ ಮುಚ್ಚಿಕೊಂಡು; ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ, ಯಾಜಕನೂ ಆಗಿರು. ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಾಯೇಲ್ಯರ ಒಂದು ಕುಲಕ್ಕೂ, ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?>> ಎಂದು ಕೇಳಿದರು.20ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ, ಕೆತ್ತನೆಯ ವಿಗ್ರಹವನ್ನೂ, ತೆಗೆದುಕೊಂಡು ಅವರ ಬಳಿಗೆ ಬಂದನು.21ತರುವಾಯ ಅವರು ತಮ್ಮ ಹೆಂಡತಿ ಮಕ್ಕಳನ್ನೂ, ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವು ಹಿಂದಿನಿಂದ ಹೊರಟರು.22ಅವರು ಮೀಕನ ಮನೆಯಿಂದ ದೂರವಾದ ಮೇಲೆ ಮೀಕನೂ ಅವನ ನೆರೆಹೊರೆಯವರೆಲ್ಲರೂ ದಾನ್ಯರನ್ನು ಹಿಂದಟ್ಟಿ23ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, <<ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ>> ಎಂದು ಕೇಳಲು24ಅವನು, <<ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?>> ಅಂದನು.25ದಾನ್ಯರು ಅವನಿಗೆ, <<ನಮ್ಮಲ್ಲಿ ಕೆಲವರು ತುಂಬಾ ಕೋಪಿಸಿಕೊಳ್ಳುವವರಿದ್ದಾರೆ; ಅವರು ನಿಮ್ಮ ಮೇಲೆ ಬಿದ್ದರೆ ನೀನೂ, ನಿನ್ನ ಮನೆಯವರೂ ಪ್ರಾಣವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಬಾಯಿಮುಚ್ಚಿಕೊಂಡು ಹೋಗು>> ಎಂದು ಹೇಳಿ ಮುಂದೆ ನಡೆದರು.26ಅವರು ತನಗಿಂತ ಬಲಿಷ್ಠರೆಂದು ತಿಳಿದುಕೊಂಡು ಮೀಕನು ಹಿಂದಿರುಗಿ ಮನೆಗೆ ಹೋದನು.27ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು ಲಯಿಷಿಗೆ ಹೋಗಿ ಸುಖದಿಂದಲೂ, ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು, ಅವರನ್ನು ಕತ್ತಿಯಿಂದ ಸಂಹರಿಸಿ, ಅವರ ಪಟ್ಟಣವನ್ನು ಸುಟ್ಟುಬಿಟ್ಟರು.28ಆ ಪಟ್ಟಣವು ಚೀದೋನಿಗೆ ದೂರವಾಗಿದ್ದುದರಿಂದಲೂ, ಸಮೀಪದಲ್ಲಿ ಪರಿಚಯಸ್ಥರು ಯಾರು ಇಲ್ಲದೆ ಇದ್ದುದರಿಂದಲೂ, ಅವರಿಗೆ ಸಹಾಯದೊರಕಲಿಲ್ಲ. ಬೇತ್‌ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು.29ಮೊದಲು ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ದಾನ್ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲಪುರುಷನೂ ಇಸ್ರಾಯೇಲನ ಮಗನೂ ಆದ ದಾನನ ಹೆಸರು.30ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.31ಶೀಲೋವಿನಲ್ಲಿ ದೇವದರ್ಶನ ಗುಡಾರವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.
19ಗಿಬೆಯದವರ ಕ್ರೂರಕೃತ್ಯ
1ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.2ಆಕೆಯು ಇವನನ್ನು ಬಿಟ್ಟು ಜಾರತ್ವಮಾಡಿ, ಯೆಹೂದದ ಬೇತ್ಲೆಹೇಮಿನಲ್ಲಿದ್ದ ತನ್ನ ತವರುಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.3ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತನಾಡಿಸಿ ತಿರುಗಿ ಮನೆಗೆ ಕರೆದುಕೊಂಡು ಹೋಗಬೇಕೆಂದು ಒಬ್ಬ ಸೇವಕನನ್ನೂ, ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆಯು ಅವನನ್ನು ತನ್ನ ತವರುಮನೆಯಲ್ಲಿ ಸೇರಿಸಿಕೊಂಡಳು; ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.4ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಮೂರು ದಿನ ಅಲ್ಲೇ ಉಳಿಸಿಕೊಂಡನು; ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.5ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, <<ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು>> ಎಂದು ಹೇಳಲು6ಅವರಿಬ್ಬರೂ ಕುಳಿತುಕೊಂಡು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ಪುನಃ ಅವನಿಗೆ, <<ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು>> ಎಂದು ಹೇಳಿದರೂ ಆ ಲೇವಿಯನು ಹೊರಡುವುದಕ್ಕಿದ್ದನು;7ಆದರೆ ಅವನ ಮಾವನು ಬಹಳ ಒತ್ತಾಯ ಮಾಡಿದ್ದರಿಂದ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು.8ಅವರು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು, <<ದಯವಿಟ್ಟು ಮಧ್ಯಾಹ್ನದವರೆಗೆ ಇಲ್ಲೇ ಇದ್ದು ಬಲಹೊಂದು>> ಎಂದು ಅವನನ್ನು ಬೇಡಿಕೊಳ್ಳಲು ಅವರು ತಿರುಗಿ ಊಟಕ್ಕೆ ನಿಂತನು.9ಅನಂತರ ಅವನೂ, ಅವನ ಉಪಪತ್ನಿಯೂ, ಸೇವಕನೂ ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, <<ಹೊತ್ತು ಹೋಯಿತು; ಸಾಯಂಕಾಲವಾಗುತ್ತಿದೆ, ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು>> ಎಂದು ಬೇಡಿಕೊಂಡನು.10ಆದರೆ ಆ ಲೇವಿಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ, ಉಪಪತ್ನಿಯನ್ನು ಕರೆದುಕೊಂಡು ಹೊರಟನು.11ಅವರು ಯೆಬೂಸಿಯರ ಊರಾದ ಯೆರೂಸಲೇಮಿನ ಸಮೀಪಕ್ಕೆ ಬಂದಾಗ ಹೊತ್ತುಮುಳುಗುವ ಸಮಯವಾಗಿದ್ದರಿಂದ ಸೇವಕನು ದಣಿಗೆ, <<ದಯವಿಟ್ಟು ಬಾ; ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ, ಅಲ್ಲಿ ರಾತ್ರಿಯನ್ನು ಕಳೆಯೋಣ>> ಅಂದನು.12ಆಗ ದಣಿಯು, <<ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ>> ಅಂದನು.13ಅವನು ತಿರುಗಿ ತನ್ನ ಆಳಿಗೆ, <<ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ, ರಾಮದಲ್ಲಾಗಲಿ ಇಳಿದುಕೊಳ್ಳೋಣ ಬಾ>> ಅಂದನು.14ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಳುಗಿದ್ದನು.15ಅವರು ಇಳಿದುಕೊಳ್ಳುವುದಕ್ಕೋಸ್ಕರ ಗಿಬೆಯಕ್ಕೆ ಹೋದರು. ಆದರೆ ಯಾರೂ ಅವರನ್ನು ಮನೆಯಲ್ಲಿ ಉಳಿದುಕೊಳ್ಳಲು ಅವಕಾಶಕೊಡದ ಕಾರಣ ಅವರು ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು.16ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುದುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಆ ಮುದುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊಲದಿಂದ ಮನೆಗೆ ಬರುತ್ತಿದ್ದನು.17ಈ ಮುದುಕನು ಬೀದಿಯಲ್ಲಿ ಕುಳಿತುಕೊಂಡಿದ್ದ ಆ ಪ್ರಯಾಣಿಕನನ್ನು ಕಂಡು, <<ನೀನು ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತೀ?>> ಎಂದು ಕೇಳಲು18ಆ ಲೇವಿಯನು ಅವನಿಗೆ, <<ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮಿನ ಪರ್ವತಪ್ರದೇಶದ ಒಂದು ದೂರಸ್ಥಳದಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು; ಈಗ ತಿರುಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಸೇರಿಸಿಕೊಳ್ಳಲಿಲ್ಲ.19ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ, ದ್ರಾಕ್ಷಾರಸವೂ ಇರುತ್ತವೆ. ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ>> ಎಂದು ಹೇಳಿದನು.20ಆಗ ಆ ಮುದುಕನು, <<ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ;21ಈ ರಾತ್ರಿಯನ್ನು ಬೀದಿಯಲ್ಲಿ ಕಳೆಯಬೇಡ, ನನ್ನ ಮನೆಗೆ ಬಾ>> ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.22ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, <<ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು>> ಎಂದು ಕೂಗಿದರು.23ಆಗ ಆ ಮುದುಕನು ಹೊರಗೆ ಹೋಗಿ ಅವರಿಗೆ, <<ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ.24ಇನ್ನೂ ಮದುವೆಯಾಗದೆ ಇರುವ ನನ್ನ ಮಗಳನ್ನೂ, ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ>> ಅಂದನು.25ಆದರೆ ಅವರು ಆ ಮುದುಕನಿಗೆ ಕಿವಿಗೊಡದೆ ಹೋದುದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಬಳಿಗೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ಕೆಡಿಸಿ, ರಾತ್ರಿಯೆಲ್ಲಾ ಬಹುಕ್ರೂರತನದಿಂದ ವರ್ತಿಸಿ, ಬೆಳಗಾಗುವಾಗ ಆಕೆಯನ್ನು ಬಿಟ್ಟುಹೋದರು.26ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳಿದುಕೊಂಡಿದ್ದ ಮನೆಯ ಬಾಗಿಲಲ್ಲಿ ಬಂದು ಬಿದ್ದವಳು ಬೆಳಗಾದರೂ ಏಳಲೇ ಇಲ್ಲ.27ಆಕೆಯ ಪತಿಯು ಬೆಳಿಗ್ಗೆ ಎದ್ದು ಹೊರಡುವುದಕ್ಕೆ ಸಿದ್ಧನಾಗಿ ಬಾಗಿಲನ್ನು ತೆರೆಯಲು, ತನ್ನ ಉಪಪತ್ನಿಯು ಬಾಗಿಲ ಮುಂದೆ ಬಿದ್ದಿರುವುದನ್ನೂ, ಆಕೆಯ ಕೈಗಳು ಹೊಸ್ತಿಲಿನ ಮೇಲಿರುವುದನ್ನೂ ಕಂಡನು.28ಅವನು, <<ಏಳು, ಹೋಗೋಣ>> ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಮನೆಗೆ ಹೋದನು.29ಅವನು ತನ್ನ ಮನೆಗೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು, ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ, ಅವುಗಳನ್ನು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದನು.30ಅವುಗಳನ್ನು ಕಂಡವರೆಲ್ಲರೂ, <<ಇಸ್ರಾಯೇಲರು ಐಗುಪ್ತವನ್ನು ಬಿಟ್ಟು ಬಂದ ದಿನದಿಂದ ಈ ದಿನದವರೆಗೆ ಇಂಥ ಕೃತ್ಯವು ನಡೆಯಲೇ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು>> ಅಂದುಕೊಂಡರು.
20ಇಸ್ರಾಯೇಲ್ಯರು ಬೆನ್ಯಾಮೀನ್ಯರೊಂದಿಗೆ ಯುದ್ಧಮಾಡಲು ಸಿದ್ಧರಾಗಿದ್ದು
1ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.2ಆ ದೇವಜನರ ಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ, ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.3ಇಸ್ರಾಯೇಲರು ಕೂಡಿಕೊಂಡು ಮಿಚ್ಪೆಗೆ ಬಂದಿದ್ದಾರೆಂಬ ವರ್ತಮಾನವು ಬೆನ್ಯಾಮೀನ್ಯರಿಗೆ ಮುಟ್ಟಿತು. ಇಸ್ರಾಯೇಲರು, <<ಈ ದುಷ್ಟತನವು ಹೇಗೆ ನಡೆಯಿತೆಂದು ತಿಳಿಸಿರಿ>> ಎಂದು ಕೇಳಲು4ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು, <<ನಾನು ನನ್ನ ಉಪಪತ್ನಿಯ ಸಹಿತವಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಉಳಿದುಕೊಂಡೆನು.5ಆ ಊರಿನ ಜನರು ನನ್ನನ್ನು ಕೊಲ್ಲಬೇಕೆಂದು ಅದೇ ರಾತ್ರಿ ನಾನು ಇಳಿದುಕೊಂಡಿದ್ದ ಮನೆಯನ್ನು ಸುತ್ತಿಕೊಂಡರು, ಮತ್ತು ನನ್ನ ಉಪಪತ್ನಿಯನ್ನು ಭಂಗಪಡಿಸಿದರು, ಆಕೆಯು ಸತ್ತುಹೋದಳು.6ಅವರು ಇಸ್ರಾಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಮತ್ತು ಕ್ರೂರ ಕೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.7ಇಲ್ಲಿ ಕೂಡಿರುವ ಎಲ್ಲಾ ಇಸ್ರಾಯೇಲರೇ, ಈಗ ನಿಮ್ಮ ಆಲೋಚನೆ ಮತ್ತು ಅಭಿಪ್ರಾಯಗಳನ್ನು ಹೇಳಿರಿ>> ಅಂದನು.8ಇದನ್ನು ಕೇಳಿ ಜನರು ಏಕಮನಸ್ಸಿನಿಂದ, <<ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗದಿರಲಿ.9ನಾವು ಚೀಟು ಹಾಕೋಣ; ಅದು ಬಿದ್ದ ಪ್ರಕಾರವೇ ಗಿಬೆಯದವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ.10ಇಸ್ರಾಯೇಲ್ಯರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವುದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಾಯೇಲರಲ್ಲಿ ನಡೆಸಿದ ದುಷ್ಟ ಕಾರ್ಯಕ್ಕಾಗಿ ಅವರಿಗೆ ದಂಡನೆಮಾಡೋಣ>> ಅಂದುಕೊಂಡರು.11ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರೋಧವಾಗಿ ಕೂಡಿಕೊಂಡರು.12ಅವರು ಬೆನ್ಯಾಮೀನ್ಯರ ಸಮಸ್ತ ಕುಲದವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, <<ನಿಮ್ಮಲ್ಲಿ ನಡೆದ ಈ ದುಷ್ಕೃತ್ಯ ಎಂಥದು?13ಈಗ ಗಿಬೆಯ ಊರಲ್ಲಿರುವ ಆ ದುಷ್ಟರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ>> ಎಂದು ಹೇಳಿದರು.14ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲಾ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಕ್ಕೆ ಸನ್ನದ್ಧರಾದರು.15ಆ ದಿನದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಸೇರಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು.16ಈ ಎಲ್ಲಾ ಜನರಲ್ಲಿ ಏಳುನೂರು ಜನರು ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬರು ಕೂದಲೆಳೆಯಷ್ಟು ಗುರಿತಪ್ಪದ ಹಾಗೆ ಕವಣೆಯನ್ನು ಹೊಡೆಯುವುದರಲ್ಲಿ ನಿಪುಣರಾಗಿದ್ದರು.17ಬೆನ್ಯಾಮೀನ್ಯರಲ್ಲದ ಇಸ್ರಾಯೇಲರಲ್ಲಿ ನಾಲ್ಕು ಲಕ್ಷ ಯೋಧರಿದ್ದರು; ಇವರೆಲ್ಲರೂ ವೀರರಾಗಿದ್ದರು.ಬೆನ್ಯಾಮೀನ್ಯರೊಡನೆ ಯುದ್ಧ
18ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, <<ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?>> ಎಂದು ದೇವರಾದ ಯೆಹೋವನನ್ನು ಕೇಳಲು ಆತನು, <<ಮೊದಲು ಯೆಹೂದ ಕುಲದವರು ಹೋಗಲಿ>> ಎಂದು ಹೇಳಿದನು.19ಇಸ್ರಾಯೇಲ್ಯರು ಬೆಳಗ್ಗೆ ಹೊರಟುಹೋಗಿ ಗಿಬೆಯದ ಎದುರಿನಲ್ಲಿ ಪಾಳೆಯಮಾಡಿಕೊಂಡು,20ಬೆನ್ಯಾಮೀನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ಸಿದ್ಧರಾಗಿ, ಗಿಬೆಯದ ಎದುರಿನಲ್ಲಿ ವ್ಯೂಹಕಟ್ಟಿ ನಿಂತರು.21ಆ ದಿನದಲ್ಲಿ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು.22ಇಸ್ರಾಯೇಲ್ಯರು ತಿರುಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹಕಟ್ಟಿದ ಸ್ಥಳದಲ್ಲೇ ತಿರುಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.23ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, <<ನಾವು ತಿರುಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?>> ಎಂದು ಕೇಳಲು, ಆತನು, <<ಹೋಗಿ ಯುದ್ಧಮಾಡಿರಿ>> ಅಂದನು.24ಆದ್ದರಿಂದ ಅವರು ಎರಡನೆಯ ದಿನದಲ್ಲಿಯೂ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು.25ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಉರುಳಿಸಿದರು.26ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.27ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಊರೊಳಗಿತ್ತು;28ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವುದರಿಂದ ಇಸ್ರಾಯೇಲ್ಯರು, <<ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ, ಬೇಡವೋ?>> ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ, <<ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು>> ಅಂದನು.29ಆಗ ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಕೆಲವರನ್ನು ಹೊಂಚು ಹಾಕುವುದಕ್ಕೆ ಇರಿಸಿ,30ಉಳಿದವರು ಬೆನ್ಯಾಮೀನ್ಯರ ಸಂಗಡ ಕಾದಾಡುವುದಕ್ಕೋಸ್ಕರ ಮುಂಚಿನಂತೆ ಮೂರನೆಯ ದಿನದಲ್ಲಿಯೂ ಗಿಬೆಯದ ಸಮೀಪದಲ್ಲಿ ವ್ಯೂಹಕಟ್ಟಿದರು.31ಬೆನ್ಯಾಮೀನ್ಯರು ಇಸ್ರಾಯೇಲ್ಯರೊಡನೆ ಯುದ್ಧಮಾಡವುದಕ್ಕಾಗಿ ಪಟ್ಟಣವನ್ನು ಬಿಟ್ಟು ಊರೊಳಕ್ಕೆ ಬಂದರು. ಅವರು ಮೊದಲಿನಂತೆ ಜನರನ್ನು ಕೊಲ್ಲುವುದಕ್ಕೆ ಪ್ರಾರಂಭಿಸಿ ಬೇತೇಲಿಗೂ, ಬೈಲಿನಲ್ಲಿರುವ ಗಿಬೆಯಕ್ಕೂ ಹೋಗುವ ರಾಜಮಾರ್ಗಗಳಲ್ಲಿ ಸುಮಾರು ಮೂವತ್ತು ಮಂದಿಯನ್ನು ಹತಮಾಡಿದರು.32ಬೆನ್ಯಾಮೀನ್ಯರು, <<ಅವರು ಮುಂಚಿನಂತೆ ಈಗಲೂ ಸೋತುಹೋಗುತ್ತಾರೆ>> ಎಂದು ಅಂದುಕೊಂಡರು. ಇಸ್ರಾಯೇಲ್ಯರಾದರೋ, <<ಅವರು ತಮ್ಮ ಪಟ್ಟಣಕ್ಕೆ ದೂರವಾಗುವಂತೆ ನಾವು ಸ್ವಲ್ಪ ದೂರ ಓಡಿಹೋಗೋಣ>> ಎಂದು ಮಾತನಾಡಿಕೊಂಡು,33ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್‌ತಾಮರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ತಿರುಗಿ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚಿ ನೋಡುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನದಿಂದ ಎದ್ದು34ಪಟ್ಟಣದ ಮುಂದೆ ಬಂದರು; ಅವರು ಸುಮಾರು ಹತ್ತು ಸಾವಿರ ಮಂದಿ ಯುದ್ಧವೀರರು. ಯುದ್ಧವು ಬಹುಘೋರವಾಯಿತು. ತಮಗೆ ಅಪಾಯವು ಒದಗಿ ಬಂದಿದೆ ಎಂಬುದು ಬೆನ್ಯಾಮೀನ್ಯರಿಗೆ ಇನ್ನೂ ಗೊತ್ತಾಗಿರಲಿಲ್ಲ.35ಯೆಹೋವನು ಇಸ್ರಾಯೇಲರಿಗೆ ಜಯವನ್ನು ಕೊಟ್ಟಿದ್ದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯರ ಯೋಧರನ್ನು ಹತಮಾಡಿದರು.ಇಸ್ರಾಯೇಲರ ವಿಜಯ
36ತಾವು ಸೋತುಹೋದೆವೆಂಬುದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. ಇಸ್ರಾಯೇಲ್ಯರು ತಾವು ಗಿಬೆಯದ ಸಮೀಪದಲ್ಲಿ ಹೊಂಚು ಹಾಕುವುದಕ್ಕಾಗಿ ಇಟ್ಟ ಜನರಲ್ಲಿ ಭರವಸವುಳ್ಳವರಾಗಿದ್ದರಿಂದ, ತಮ್ಮ ಸ್ಥಳವನ್ನು ಬಿಟ್ಟು ಬೆನ್ಯಾಮೀನ್ಯರ ಮುಂದೆ ಓಡಿಹೋದರು.37ಅಷ್ಟರಲ್ಲಿ ಅಡಗಿಕೊಂಡಿದ್ದವರು ಎದ್ದು ಗಿಬೆಯಕ್ಕೆ ಶೀಘ್ರವಾಗಿ ಹೋಗಿ, ಅದರೊಳಗಿದ್ದವರೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು.38ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ, ಓಡಿಹೋಗುತ್ತಿದ್ದವರು ಪುನಃ ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚು ಹಾಕುವವರೂ ಹಾಗು ಉಳಿದ ಇಸ್ರಾಯೇಲರೂ ತಮ್ಮ ತಮ್ಮೊಳಗೆ ಮೊದಲೇ ಗೊತ್ತುಮಾಡಿಕೊಂಡಿದ್ದರು.39ಬೆನ್ಯಾಮೀನ್ಯರಾದರೋ, <<ಇಸ್ರಾಯೇಲ್ಯರು ಮುಂಚಿನಂತೆ ನಮ್ಮ ಮುಂದೆ ಸೋತುಹೋದರು>> ಎಂದು ತಿಳಿದು ಅವರನ್ನು ಹತಮಾಡಲು ಪ್ರಾರಂಭಿಸಿ, ಸುಮಾರು ಮೂವತ್ತು ಮಂದಿಯನ್ನು ಕೊಂದುಹಾಕಿದರು.40ಆದರೆ ಪಟ್ಟಣದಿಂದ ಹೊಗೆ ಎದ್ದು ಸ್ತಂಭದೋಪಾದಿಯಲ್ಲಿ ಕಾಣಿಸಿಕೊಳ್ಳಲು ಇಸ್ರಾಯೇಲರು ತಿರುಗಿ ನಿಂತರು.41ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದನ್ನು ಕಂಡು ತಮಗೆ ಅಪಾಯ ಉಂಟಾಗುವುದೆಂದು ಕಳವಳಗೊಂಡರು.42ಅವರು ಇಸ್ರಾಯೇಲರಿಗೆ ಬೆನ್ನು ತೋರಿಸಿ ಅರಣ್ಯಮಾರ್ಗವಾಗಿ ಓಡಿಹೋದರು. ಆದರೆ ಯುದ್ಧವೀರರು ಅವರನ್ನು ಹಿಂದಟ್ಟಿದ್ದರಿಂದಲೂ, ಪಟ್ಟಣಕ್ಕೆ ಬೆಂಕಿ ಹೊತ್ತಿಸಿದವರು ಹೊರಗೆ ಬಂದುಬಿಟ್ಟಿದ್ದರಿಂದಲೂ, ಅವರು ಇಬ್ಬರ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡರು.43ಇಸ್ರಾಯೇಲರು ಅವರನ್ನು ಸುತ್ತಿಕೊಂಡು, ಎಲ್ಲಿಯೂ ಓಡಿಹೋಗದಂತೆ, ಗಿಬೆಯ ಊರಿನ ಪೂರ್ವದಿಕ್ಕಿನಲ್ಲಿರುವ ಮೆನೂಹದಲ್ಲಿ ತುಳಿದುಹಾಕಿಬಿಟ್ಟರು.44ಈ ಪ್ರಕಾರ ಬೆನ್ಯಾಮೀನ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರು ಹತರಾದರು.45ಇದಲ್ಲದೆ ಅವರು ಅರಣ್ಯದಲ್ಲಿರುವ ರಿಮ್ಮೋನ್ ಗಿರಿಗೆ ಓಡಿಹೋಗುವಾಗ ಹಕ್ಕಲು ತೆನೆಗಳನ್ನೋ ಎಂಬಂತೆ ಐದು ಸಾವಿರ ಜನರನ್ನು ರಾಜಮಾರ್ಗಗಳಲ್ಲಿ ಕೊಂದು ಹಾಕಿದರು. ಅಲ್ಲಿಂದ ಗಿದೋಮಿನವರೆಗೆ ಹಿಂದಟ್ಟಿ ತಿರುಗಿ ಎರಡು ಸಾವಿರ ಜನರನ್ನು ಹತಮಾಡಿದರು.46ಹೀಗೆ ಆ ದಿನ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಸೈನಿಕರು ಸಂಹರಿಸಲ್ಪಟ್ಟರು.47ಆದರೆ ಆರು ನೂರು ಮಂದಿ ಅರಣ್ಯಮಾರ್ಗವಾಗಿ ಓಡಿಹೋಗಿ, ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು.48ಇಸ್ರಾಯೇಲರು ಪುನಃ ಹಿಂತಿರುಗಿ ಬಂದು ಬೆನ್ಯಾಮೀನ್ ದೇಶದ ಉಳಿದ ಗ್ರಾಮನಗರಗಳಿಗೆ ಹೋಗಿ ಅವುಗಳ ನಿವಾಸಿಗಳನ್ನೂ, ದನಕುರಿಗಳನ್ನೂ, ಸಿಕ್ಕಿದ್ದೆಲ್ಲವನ್ನು ಸಂಹರಿಸಿ ಎಲ್ಲಾ ಊರುಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
21ಹತರಾಗದೆ ಉಳಿದ ಬೆನ್ಯಾಮೀನ್ಯರಿಗೆ ಹೆಂಡತಿಯರನ್ನು ದೊರಕಿಸಿದ್ದು
1ಇಸ್ರಾಯೇಲರೆಲ್ಲರೂ ಮಿಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವುದಿಲ್ಲವೆಂದು ಆಣೆಯಿಟ್ಟಿದ್ದರು.2ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು, ಗಟ್ಟಿಯಾಗಿ ಅಳುತ್ತಾ,3<<ಯೆಹೋವನೇ, ಇಸ್ರಾಯೇಲ್ಯರ ದೇವರೇ, ನಮ್ಮಲ್ಲಿ ಹೀಗೆ ಯಾಕೆ ಆಯಿತು? ಇಸ್ರಾಯೇಲರ ಒಂದು ಕುಲವು ಹಾಳಾಗಿ ಹೋಯಿತಲ್ಲಾ>> ಎಂದು ಕೂಗಿದರು.4ಮರುದಿನ ಅವರು ಬೆಳಿಗ್ಗೆ ಎದ್ದು ಯಜ್ಞವೇದಿಯನ್ನು ಕಟ್ಟಿ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.5ಮತ್ತು ಯೆಹೋವನ ಮುಂದೆ ಸಭೆ ಸೇರಿದಾಗ, ಬಾರದೆ ಇದ್ದಂಥ ಇಸ್ರಾಯೇಲರು ಯಾರಾರೆಂದು ವಿಚಾರಮಾಡಿದರು. ಯಾಕೆಂದರೆ ಮಿಚ್ಪೆಯಲ್ಲಿ, <<ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದು ಹಾಕುವೆವು>> ಎಂದು ಆಣೆಯಿಟ್ಟು ಪ್ರಮಾಣಮಾಡಿದ್ದರು.6ಇಸ್ರಾಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ಕಂಡು ದುಃಖದಿಂದ, <<ಅಯ್ಯೋ, ಇಸ್ರಾಯೇಲರಾದ ನಮ್ಮಲ್ಲಿ ಒಂದು ಕುಲವು ಕಡಿಮೆಯಾಯಿತಲ್ಲಾ;7ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟಿದ್ದೇವಲ್ಲಾ>> ಎಂದು ಗೋಳಾಡಿದರು.8ಮಿಚ್ಪೆಯಲ್ಲಿ ಯೆಹೋವನ ಮುಂದೆ ಸಭೆ ಸೇರಿದಾಗ, ಅದಕ್ಕೆ ಬಾರದಿದ್ದ ಇಸ್ರಾಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.9ಜನರನ್ನು ಲೆಕ್ಕಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಯಾರೂ ಬರಲಿಲ್ಲವೆಂಬುದು ದೃಢವಾಯಿತು.10ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, <<ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ, ಸ್ತ್ರೀಯರನ್ನೂ, ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು;11ಹೇಗೂ ಪುರುಷರನ್ನು, ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವುದು ನಿಮ್ಮ ಕೆಲಸ>> ಎಂದು ಆಜ್ಞಾಪಿಸಿ ಕಳುಹಿಸಿದರು.12ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವುದಕ್ಕೆ ಹೋದವರು ಇವರನ್ನು ಉಳಿಸಿ, ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.13ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನ ವಾಕ್ಯವನ್ನು ಪ್ರಕಟಿಸಲು ಅವರು ತಿರುಗಿ ಬಂದರು.14ಇಸ್ರಾಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಆದರೂ ಅನೇಕರಿಗೆ ಕನ್ಯೆಯರು ದೊರೆಯಲಿಲ್ಲ.15ಯೆಹೋವನು ಇಸ್ರಾಯೇಲಿನ ಕುಲಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.16ಸಭೆಯ ಹಿರಿಯರು, <<ಉಳಿದಿರುವ ಬೆನ್ಯಾಮೀನ್ಯರಿಗೋಸ್ಕರ ಹೆಂಡತಿಯರನ್ನು ದೊರಕಿಸಿ ಕೊಡುವುದು ಹೇಗೆ? ಅವರ ಸ್ತ್ರೀಯರೆಲ್ಲಾ ಸಂಹಾರವಾದರಲ್ಲಾ.17ಇಸ್ರಾಯೇಲ್ಯರ ಒಂದು ಪೂರ್ಣ ಕುಲವು ಅಳಿದುಹೋಗಬಾರದು; ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನರಿಗೆ ಬಾಧ್ಯಸ್ಥರು ಹುಟ್ಟುಬೇಕಲ್ಲಾ.18ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಾಯೇಲರು ಶಾಪಗ್ರಸ್ತರಾಗಲಿ ಎಂದು ಆಣೆಯಿಟ್ಟುಕೊಂಡಿದ್ದ ಕಾರಣ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ>> ಎಂದು ಮಾತನಾಡಿಕೊಳ್ಳುತ್ತಿದ್ದರು.19ಆಗ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬುದು ಅವರ ನೆನಪಿಗೆ ಬಂದಿತು. (ಶೀಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ, ಲೆಬೋನದ ದಕ್ಷಿಣಕ್ಕೂ ಇರುತ್ತದೆ.)20ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ, <<ಇಗೋ, ನೀವು ದ್ರಾಕ್ಷಿತೋಟಗಳಲ್ಲಿ ಅಡಗಿಕೊಳ್ಳಿರಿ;21ಶೀಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ, ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶೀಲೋವಿನ ಕನ್ಯೆಯರಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಸೀಮೆಗೆ ಓಡಿಹೋಗಿರಿ.22ಅವರ ತಂದೆಗಳೂ, ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ, <ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು> ಎಂದು ಹೇಳಿ ಸಮಾಧಾನಪಡಿಸುವೆವು>> ಅಂದರು.23ಅದರಂತೆಯೇ ಬೆನ್ಯಾಮೀನ್ಯರು ನೃತ್ಯಮಾಡುತ್ತ ಹೊರಗೆ ಬಂದಿದ್ದ ಕನ್ಯೆಯರಲ್ಲಿ ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ಹೆಂಡತಿಯರನ್ನಾಗಿ ಹಿಡಿದುಕೊಂಡು ತಮ್ಮ ಸ್ವಾಧೀನವಾದ ಭೂಮಿಗೆ ಹೋಗಿ ಅಲ್ಲಿ ಪಟ್ಟಣಗಳನ್ನು ಕಟ್ಟಿ ವಾಸಮಾಡಿದರು.24ಅನಂತರ ಇಸ್ರಾಯೇಲರು ತಮ್ಮ ತಮ್ಮ ಕುಲಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.25ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.
1 ಸಮುವೇಲನು
1ಎಲ್ಕಾನನು ಮತ್ತು ಅವನ ಕುಟುಂಬ
1 ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.2ಎಲ್ಕಾನನಿಗೆ ಇಬ್ಬರು ಹೆಂಡತಿಯರಿದ್ದರು. ಮೊದಲನೆಯವಳು ಹನ್ನಳು, ಎರಡನೆಯವಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು; ಹನ್ನಳಿಗೆ ಮಕ್ಕಳಿರಲಿಲ್ಲ.3ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.4ಎಲ್ಕಾನನು ಯಜ್ಞವನ್ನರ್ಪಿಸಿದಾಗೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣುಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು.5ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು.6ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, <<ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ>> ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.7ಅವರು ಪ್ರತಿವರ್ಷವೂ ಕುಟುಂಬವಾಗಿ ಯೆಹೋವನ ಮಂದಿರಕ್ಕೆ ಹೋದಾಗೆಲ್ಲಾ ಪೆನಿನ್ನಳು ಆಕೆಯನ್ನು ಕೆಣಕುತ್ತಿದ್ದುದರಿಂದ ಹನ್ನಳು ಊಟ ಮಾಡದೆ ಅಳುತ್ತಾ ಇದ್ದಳು.8ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ <<ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ>> ಅಂದನು.ಹನ್ನಳ ಪ್ರಾರ್ಥನೆ
9ಅವರು ಶೀಲೋವಿನಲ್ಲಿದ್ದ ಒಂದು ಸಂದರ್ಭದಲ್ಲಿ, ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಹನ್ನಳು ಎದ್ದು ಯೆಹೋವನ ಮಂದಿರಕ್ಕೆ ಹೋದಳು. ಯಾಜಕನಾದ ಏಲಿಯು ಮಂದಿರದ್ವಾರದ ನಿಲುವುಗಳ ಬಳಿಯಲ್ಲಿದ್ದ ತನ್ನ ಪೀಠದ ಮೇಲೆ ಕುಳಿತ್ತಿದ್ದನು.10ಹನ್ನಳು ಬಹುದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನಿಗೆ,11<<ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ>> ಎಂದು ಪ್ರಾರ್ಥಿಸಿ ಹರಕೆಮಾಡಿದಳು.12ಆಕೆಯು ಬಹಳ ಹೊತ್ತಿನ ವರೆಗೆ ಯೆಹೋವನ ಮುಂದೆ ಪ್ರಾರ್ಥನೆಮಾಡುತ್ತಿರುವಾಗ ಏಲಿಯು ಆಕೆಯ ಬಾಯನ್ನೇ ನೋಡುತ್ತಿದ್ದನು.13ಆಕೆ ತನ್ನ ಹೃದಯದಲ್ಲಿ ಪ್ರಾರ್ಥಿಸುತ್ತಿದ್ದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸುತ್ತಿರಲಿಲ್ಲ. ಆದ್ದರಿಂದ ಆಕೆಯು ಮದ್ಯಪಾನಮಾಡಿದ್ದಾಳೆಂದು ತಿಳಿದು14ಏಲಿಯು, <<ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೇ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟು ಹೋಗಲಿ>> ಅಂದನು.15ಅದಕ್ಕೆ ಹನ್ನಳು <<ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.16ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ, ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು>> ಎಂದು ಹೇಳಿದಳು.17ಆಗ ಏಲಿಯು ಆಕೆಗೆ, <<ಸಮಾಧಾನದಿಂದ ಹೋಗು; ಇಸ್ರಾಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ>> ಎಂದನು.18ಹನ್ನಳು ಏಲಿಗೆ, <<ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ>> ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆ ಮೇಲೆ ಆಕೆಯ ಮುಖದಲ್ಲಿ ದುಃಖವು ಕಾಣಲಿಲ್ಲ.ಸಮುವೇಲನ ಜನನ ಮತ್ತು ಸಮರ್ಪಣೆ
19ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು.20ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.21ಎಲ್ಕಾನನು ಎಂದಿನಂತೆ ಕುಟುಂಬ ಸಹಿತವಾಗಿ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸಿ ಹರಕೆಸಲ್ಲಿಸಬೇಕೆಂದು ಶೀಲೋವಿಗೆ ಹೋಗುವುದಕ್ಕೆ ಸಿದ್ಧನಾಗಲು ಹನ್ನಳು22<<ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು ಕರೆದುಕೊಂಡು ಬರುವೆನು>> ಎಂದು ಹೇಳಿದಳು.23ಆಕೆಯ ಗಂಡನಾದ ಎಲ್ಕಾನನು ಆಕೆಗೆ <<ನಿನಗೆ ಸರಿತೋರುವ ಹಾಗೆ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ>> ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು.24ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು.25ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ಕರೆದುಕೊಂಡು ಬಂದರು.26ಹನ್ನಳು ಏಲಿಗೆ <<ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.27ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ;28ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು>> ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.
2ಹನ್ನಳ ಸ್ತುತಿ ಗೀತೆ
1ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು,<< ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ;
ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ,
ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.
2<<ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ;ನಿನ್ನ ಹೊರತು ದೇವರು ಯಾರೂ ಇಲ್ಲ
ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ.
3<<ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ;ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ.
ದೇವರಾದ ಯೆಹೋವನು ಸರ್ವಜ್ಞನು;
ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು.
4<<ಶೂರರ ಬಿಲ್ಲುಗಳು ಮುರಿಯಲ್ಪಟ್ಟಿವೆ,ಎಡವಿದವರು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾರೆ.
5ಹೊಟ್ಟೆತುಂಬಾ ಊಟಮಾಡುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ;ಹಸಿದವರು ಉಂಡು ಸುಖದಿಂದಿರುತ್ತಾರೆ.
ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು;
ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.
6<<ಯೆಹೋವನೇ ಸಾಯಿಸುವವನೂ ಬದುಕಿಸುವವನೂ;ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ.
7ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ,ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.
8ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ.
ಭೂಮಿಯ ಆಧಾರಸ್ತಂಭಗಳು ಯೆಹೋವನವೇ;
ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.
9<<ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು;ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು,
ಭುಜಬಲದಿಂದಲೇ ಯಾವನೂ ಜಯಹೊಂದಲಾರನು.
10<<ಯೆಹೋವನನ್ನು ವಿರೋಧಿಸುವವರು ಮುರಿಯಲ್ಪಡುತ್ತಾರೆ;ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ.
ಯೆಹೋವನು ಭೂಮಿಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು.
ತಾನು ನೇಮಿಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು;
ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.>>
11ಅನಂತರ ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.ಏಲಿಯ ಮಕ್ಕಳ ದುಷ್ಟತ್ವ
12ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.13ಯಜ್ಞವನ್ನರ್ಪಿಸುವುದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನಂದರೆ, ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರುತ್ತಿದ್ದನು.14ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ , ಭಾಂಡಲ್ಲಾಗಲಿ (ದೊಡ್ಡ ಹಂಡೆ), ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೆಂದು ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುತ್ತಿದ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು.15ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವುದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ, <<ಯಾಜಕನಿಗೋಸ್ಕರ ಸುಡತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವುದಿಲ್ಲ; ಅವನಿಗೆ ಹಸಿಮಾಂಸವೇ ಬೇಕು>> ಅನ್ನುವನು.16ಅರ್ಪಿಸುವವನು, ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದರೆ ಅವನು, <<ಈಗಲೇ ಕೊಡಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು>> ಎನ್ನುವನು.17ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು.ಸಮುವೇಲನು ಶಿಲೋವಿನಲ್ಲಿ
18ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.19ಅವನ ತಾಯಿಯು ಪ್ರತಿವರ್ಷವೂ ತನ್ನ ಗಂಡನ ಜೊತೆಯಲ್ಲಿ ಯಜ್ಞವನ್ನರ್ಪಿಸುವುದಕ್ಕೆ ಬರುವಾಗ ಒಂದು ಚಿಕ್ಕ ಅಂಗಿಯನ್ನು ಹೊಲಿದು ಅವನಿಗೆ ತಂದುಕೊಡುತ್ತಿದ್ದಳು.20ಏಲಿಯು ಎಲ್ಕಾನನಿಗೆ, <<ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ>> ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.21ಯೆಹೋವನು ಕಟಾಕ್ಷಿಸಿದ್ದರಿಂದ ಹನ್ನಳಿಗೆ ಮೂರು ಮಂದಿ ಗಂಡುಮಕ್ಕಳೂ, ಇಬ್ಬರು ಹೆಣ್ಣುಮಕ್ಕಳಾದರು. ಬಾಲಕನಾಗಿದ್ದ ಸಮುವೇಲನು ಯೆಹೋವನ ಸನ್ನಿಧಿಯಲ್ಲೇ ಬೆಳೆದು ದೊಡ್ಡವನಾದನು.22ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲರಲ್ಲಿ ನಡೆಸುತ್ತಿರುವುದನ್ನೂ, ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರೊಡನೆ ಸಂಗಮಿಸುತ್ತಿರುವುದನ್ನೂ ಕೇಳಿ23ಅವರಿಗೆ, <<ಎಲ್ಲಾ ಜನರಿಂದಲೂ ನಿಮ್ಮ ದುಷ್ಕೃತ್ಯಗಳನ್ನು ಕೇಳುತ್ತೇನೆ. ಹೀಗೇಕೆ ಮಾಡುತ್ತೀರಿ?>>24ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೆಯದಲ್ಲ.25<<ಮನುಷ್ಯನು ಮನುಷ್ಯರಿಗೆ ಅಪರಾಧಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಆದರೆ ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?>> ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ, ಯಾಕೆಂದರೆ ಯೆಹೋವನು ಅವರನ್ನು ನಾಶಮಾಡಲು ನಿರ್ಧರಿಸಿದ್ದನು.26ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.ಏಲಿಯ ಕುಟುಂಬಕ್ಕೆ ಎಚ್ಚರಿಕೆ
27ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ, <<ಯೆಹೋವನು ನಿನಗೆ ಹೇಳುವುದೇನಂದರೆ, <ಇಸ್ರಾಯೇಲರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ28ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.29ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ, ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದೇಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೋ?>30ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, <ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.31ಇಗೋ, ನಾನು ನಿನ್ನ ಮತ್ತು ನಿನ್ನ ಮನೆಯವರ ಭುಜಬಲವನ್ನು ಮುರಿಯುವ ದಿನಗಳು ಬರುವವು. ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವುದಿಲ್ಲ.32ನಿನ್ನ ವೈರಿಯು ನನ್ನ ಮಂದಿರದಲ್ಲಿ ಸೇವೆಮಾಡುವುದನ್ನು ನೋಡುವಿ. ಇಸ್ರಾಯೇಲರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಪೂರ್ಣಾಯುಷ್ಯವನ್ನು ಹೊಂದಿ ಜೀವಿಸುವವರು ಇನ್ನು ಮುಂದೆ ಒಬ್ಬರಾದರು ಇರುವುದಿಲ್ಲ.33ನಾನು ನಿನ್ನ ಸಂತಾನವನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕದೆ, ಒಬ್ಬನನ್ನಾದರೂ ಉಳಿಸಿದರೆ ಅವನು ನಿನ್ನ ಕಣ್ಣೀರಿಗೂ ಮತ್ತು ಮನೋವ್ಯಥೆಗೂ ಕಾರಣನಾಗುವನು. ನಿನ್ನ ಸಂತಾನದವರೆಲ್ಲರೂ ಕತ್ತಿಯಿಂದ ಸಂಹಾರವಾಗುವರು.34ಇದೆಲ್ಲಾ ನೆರವೇರುವುದೆಂಬುದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಹಾಗೂ ಫೀನೆಹಾಸರು ಒಂದೇ ದಿನದಲ್ಲಿ ಸಾಯುವುದೇ ಗುರುತಾಗಿರುವುದು.35ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.>36ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ>> ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು.
3ಸಮುವೇಲನಿಗಾದ ದೈವೋಕ್ತಿ
1ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.2ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಸರಿಯಾಗಿ ಕಾಣಿಸದೆಹೋಗಿದ್ದವು. ಅವನು ಒಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು;3ಸಮುವೇಲನು ಯೆಹೋವನ ಮಂದಿರದಲ್ಲಿ ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ಆಗ ದೇವದೀಪವು ಇನ್ನೂ ಉರಿಯುತ್ತಿತ್ತು.4ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು <<ಇಗೋ ಬಂದೆ>> ಎಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ,5<<ಇಗೋ ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲವೇ?>> ಅಂದನು. ಆಗ ಏಲಿಯು, <<ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ>> ಅಂದನು. ಸಮುವೇಲನು ಹೋಗಿ ಮಲಗಿದನು.6ಯೆಹೋವನು ತಿರುಗಿ, <<ಸಮುವೇಲನೇ>> ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, <<ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ>> ಅನ್ನಲು ಅವನು, <<ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ>> ಎಂದನು.7ಆವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಅವನು ದೈವೋಕ್ತಿಗಳನ್ನು ಹೊಂದಿರಲಿಲ್ಲ.8ಯೆಹೋವನು ಸಮುವೇಲನನ್ನು ಮೂರನೆಯ ಸಾರಿ ಕರೆದನು. ಅವನು ತಟ್ಟನೆ ಏಲಿಯ ಹತ್ತಿರ ಹೋಗಿ, <<ಇಗೋ, ಬಂದಿದ್ದೇನೆ, ನನ್ನನ್ನು ಕರೆದಿಯಲ್ಲಾ>> ಅನ್ನಲು, ಹುಡುಗನನ್ನು ಕರೆದವನು ಯೆಹೋವನೇ ಎಂದು ಏಲಿಯು ತಿಳಿದು ಅವನಿಗೆ, <<ಹೋಗಿ ಮಲಗಿಕೋ;9ಪುನಃ ಆತನು ನಿನ್ನನ್ನು ಕರೆದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ>> ಎಂದು ಹೇಳು ಅಂದನು. ಸಮುವೇಲನು ತಿರುಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಂಡನು.10ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ <<ಸಮುವೇಲನೇ, ಸಮುವೇಲನೇ>> ಅಂದನು. ಸಮುವೇಲನು, <<ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ>> ಎಂದನು.11ಯೆಹೋವನು ಸಮುವೇಲನಿಗೆ <<ನಾನು ಇಸ್ರಾಯೇಲ್ಯರಲ್ಲಿ ಒಂದು ವಿಶೇಷಕಾರ್ಯವನ್ನು ನಡೆಸುವೆನು; ಅದರ ವಿಷಯ ಕೇಳುವವರ ಎರಡು ಕಿವಿಗಳೂ ನಿಮಿರುವುವು.12ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನದಲ್ಲಿ ತಪ್ಪದೆ ನೆರವೇರಿಸುವೆನು.13ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.14 ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ಅಥವಾ ನೈವೇದ್ಯಗಳಿಂದ ಎಂದಿಗೂ ಪ್ರಾಯಶ್ಚಿತ್ತವಾಗುವುದಿಲ್ಲ ಎಂಬುದಾಗಿ ಆಣೆಯಿಟ್ಟಿದ್ದೇನೆ>> ಎಂದು ಹೇಳಿದನು.15ಅನಂತರ ಸಮುವೇಲನು ಮಲಗಿ ಮುಂಜಾನೆಯಲ್ಲೇ ಎದ್ದು ಯೆಹೋವನ ಮಂದಿರದ ಬಾಗಿಲುಗಳನ್ನು ತೆರೆದನು. ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವುದಕ್ಕೆ ಭಯಪಟ್ಟನು.16ಆದರೆ ಏಲಿಯು, <<ನನ್ನ ಮಗನೇ, ಸಮುವೇಲನೇ>> ಎಂದು ಕರೆಯಲು ಅವನು, <<ಇಗೋ, ಇದ್ದೇನೆ>> ಎಂದನು.17ಆಗ ಏಲಿಯು ಅವನಿಗೆ, <<ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಿಡಬೇಡ; ಮುಚ್ಚಿಟ್ಟರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ>> ಎಂದು ಹೇಳಲು18ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, <<ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ>> ಎಂದನು.19ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.20ಯೆಹೋವನು ಅವನನ್ನು ತನ್ನ ಪ್ರವಾದಿಯನ್ನಾಗಿ ನೇಮಿಸಿಕೊಂಡದ್ದು ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲಾ ಇಸ್ರಾಯೇಲರಿಗೆ ಗೊತ್ತಾಯಿತು.21ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು. ಸಮುವೇಲನು ಇಸ್ರಾಯೇಲರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು.
4ಫಿಲಿಷ್ಟಿಯರ ಜಯ - ಏಲಿಯ ಮಕ್ಕಳ ಮರಣ
1ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.2ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು.3ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, <<ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ>> ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ4 ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.5ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.6ಫಿಲಿಷ್ಟಿಯರು ಇದನ್ನು ಕೇಳಿ, <<ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣ>> ಎಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ತಿಳಿದುಕೊಂಡರು.7ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು, <<ಅಯ್ಯೋ! ಮುಂಚೆ ಹೀಗಾಗಿರಲ್ಲಿಲ್ಲ.8ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!9 ಫಿಲಿಷ್ಟಿಯರೇ, ಬಲಗೊಳ್ಳಿರಿ, ಶೂರರಾಗಿರಿ; ನಿಮಗೆ ದಾಸರಾಗಿದ್ದ ಇಬ್ರಿಯರಿಗೆ ನೀವೇ ದಾಸರಾದೀರಿ. ಆದಕಾರಣ ಶೌರ್ಯದಿಂದ ಯುದ್ಧಮಾಡಬೇಕು>> ಎಂದು ಹೇಳಿಕೊಂಡು10ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.11 ದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿಯೂ ಮತ್ತು ಫೀನೆಹಾಸನೂ ಹತರಾದರು.ಏಲಿಯ ಮರಣ
12ಅದೇ ದಿನ ಒಬ್ಬ ಬೆನ್ಯಾಮೀನನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಶೀಲೋವಿಗೆ ಬಂದು13ನಡೆದದ್ದನ್ನು ತಿಳಿಸಲಾಗಿ ಜನರೆಲ್ಲಾ ಗೋಳಾಡತೊಡಗಿದರು. ದೇವರ ಮಂಜೂಷವೇನಾಯಿತೋ ಎಂಬ ಚಿಂತೆಯಿಂದ ಮಂದಿರದ್ವಾರದ ಬಳಿಯಲ್ಲಿ ಆಸೀನನಾಗಿ ದಾರಿಯನ್ನು ನೋಡುತ್ತಿದ್ದ ಏಲಿಯು ಆ ದುಃಖದ ಧ್ವನಿಯನ್ನು ಕೇಳಿ14ಈ ಗದ್ದಲವೇನೆಂದು ವಿಚಾರಿಸಲು ಒಡನೆ ಆ ಮನುಷ್ಯನು ಏಲಿಯ ಬಳಿಗೆ ಬಂದು ನಡೆದದ್ದೆಲ್ಲವನ್ನೂ ತಿಳಿಸಿದನು. ಏಲಿಯು ತೊಂಭತ್ತೆಂಟು ವರ್ಷದವನು;15ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.16ಆ ಮನುಷ್ಯನು ಏಲಿಗೆ, <<ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು>> ಅನ್ನಲು ಏಲಿಯು ಅವನನ್ನು, <<ನನ್ನ ಮಗನೇ, ವರ್ತಮಾನವೇನು?>> ಎಂದು ಕೇಳಿದನು.17ಅವನು ಏಲಿಗೆ, <<ಇಸ್ರಾಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು>> ಎಂದು ತಿಳಿಸಿದನು.18ಮುದುಕನೂ, ಸ್ಥೂಲಕಾಯನೂ ಆದ ಏಲಿಯು ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದೊಡನೆಯೇ ಪೀಠದಿಂದ ಹಿಂದಕ್ಕೆ ಬಾಗಿಲಿನ ಕಡೆಗೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಅವನು ಇಸ್ರಾಯೇಲರನ್ನು ನಲ್ವತು ವರ್ಷ ಪಾಲಿಸಿದ್ದನು.19ಅವನ ಸೊಸೆಯಾದ ಫೀನೆಹಾಸನ ಹೆಂಡತಿ ದಿನತುಂಬಿದ ಗರ್ಭಿಣಿಯಾಗಿದ್ದಳು. ಅವಳು ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ, ತನ್ನ ಮಾವನೂ, ತನ್ನ ಗಂಡನೂ ಹತರಾದದ್ದನ್ನೂ ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.20ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು, <<ಭಯಪಡಬೇಡ, ಮಗನನ್ನು ಹಡೆದಿರುವೆ>> ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರಕೊಡಲಿಲ್ಲ.21ದೇವರ ಮಂಜೂಷವು ಶತ್ರುವಶವಾದ್ದರಿಂದಲೂ, ಮಾವನೂ, ಗಂಡನೂ ಮೃತರಾದ್ದರಿಂದಲೂ, <<ಮಹಿಮೆಯು ಇಸ್ರಾಯೇಲರನ್ನು ಬಿಟ್ಟು ಹೋಯಿತೆಂದು ಹೇಳಿ ಆ ಕೂಸಿಗೆ ಈಕಾಬೋದ್>> ಎಂದು ಹೆಸರಿಟ್ಟಳು.22<<ದೇವರ ಮಂಜೂಷವು ಶತ್ರುವಶವಾದ್ದರಿಂದಲೇ ಇಸ್ರಾಯೇಲರ ಮಹಿಮೆಯು ಹೊರಟುಹೋಯಿತೆಂದು>> ಹೇಳಿದಳು.
5ದೇವರ ಮಂಜೂಷವು ಫಿಲಿಷ್ಟಿಯರಿಗೆ ಮಾರಕವಾದದ್ದು
1ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ2 ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ಅಲ್ಲಿ ದಾಗೋನನ ಮಗ್ಗುಲಲ್ಲೇ ಇಟ್ಟರು.3ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವುದನ್ನು ಕಂಡು ಅದನ್ನು ಎತ್ತಿ ತಿರುಗಿ ಅದರ ಸ್ಥಳದಲ್ಲಿಟ್ಟರು.4ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ, ಕೈಗಳೂ ಕಡಿಯಲ್ಪಟ್ಟು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು;5ಆದ್ದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ಮತ್ತು ದಾಗೋನನ ಮನೆಗೆ ಬರುವವರೆಲ್ಲರೂ ಅಷ್ಡೋದಿನ ಗುಡಿಯ ಹೊಸ್ತಿಲನ್ನು ಇಂದಿಗೂ ತುಳಿಯದಿರುವುದಕ್ಕೆ ಇದೇ ಕಾರಣ.6 ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು.7ಅಷ್ಡೋದಿನ ಜನರು ಅದನ್ನು ನೋಡಿ, <<ಇಸ್ರಾಯೇಲಿನ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಏಕೆಂದರೆ ಆತನ ಹಸ್ತವು ನಮಗೂ, ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ>> ಎಂದು ಹೇಳಿ8 ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, <<ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?>> ಎಂದು ಕೇಳಲು ಅವರು, <<ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.>> ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.9ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.10ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, <<ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ>> ಎಂದು ಕೂಗಿಕೊಂಡರು.11ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, <<ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ>> ಅಂದರು.12ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.
6ಫಿಲಿಷ್ಟಿಯರು ದೇವರ ಮಂಜೂಷವನ್ನು ಹಿಂದಕ್ಕೆ ಕಳುಹಿಸಿದ್ದು
1ಯೆಹೋವನ ಮಂಜೂಷವು ಫಿಲಿಷ್ಟಿಯರ ದೇಶದಲ್ಲಿ ಏಳು ತಿಂಗಳ ಕಾಲ ಇತ್ತು.2ನಂತರ ಫಿಲಿಷ್ಟಿಯರು ಪೂಜಾರಿಗಳನ್ನೂ, ಕಣಿಹೇಳುವವರನ್ನೂ ಕರೆದು ಅವರಿಗೆ, <<ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಪುನಃ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು ತಿಳಿಸಿರಿ>> ಅನ್ನಲು3ಅವರು, <<ನೀವು ಇಸ್ರಾಯೇಲಿನ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು. ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ. ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿರುವುದಕ್ಕೆ ಕಾರಣವು ಗೊತ್ತಾಗುವುದು>> ಎಂದು ಹೇಳಿದರು.4ಜನರು, <<ನಾವು ಪ್ರಾಯಶ್ಚಿತ್ತಾರ್ಥವಾಗಿ ಏನು ಕಳುಹಿಸಬೇಕು?>> ಎಂದು ಕೇಳಲು ಅವರು, <<ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ, ಬಂಗಾರದ ಐದು ಇಲಿಗಳನ್ನು ಮಾಡಿಸಬೇಕು.5ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು.6ಐಗುಪ್ತರಂತೆಯೂ ಫರೋಹನಂತೆಯೂ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳುವುದೇಕೆ? ಇಸ್ರಾಯೇಲ್ಯರನ್ನು ಕಳುಹಿಸಲೊಲ್ಲದ ಇವರನ್ನು ಯೆಹೋವನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲಾ.7ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿಸಿರಿ. ಅದಕ್ಕೆ ಹಾಲು ಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿರಿ8ಆ ಬಂಡಿಯ ಮೇಲೆ ಯೆಹೋವನ ಮಂಜೂಷವನ್ನೂ, ನೀವು ಪ್ರಾಯಶ್ಚಿತ್ತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಟ್ಟು ಕಳುಹಿಸಿಬಿಡಿರಿ.9ಅ ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು ಬೇತ್ ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಆ ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲ್ಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ>> ಅಂದರು.10ಅದೇ ಪ್ರಕಾರ ಫಿಲಿಷ್ಟಿಯರು ಹಾಲುಕರೆಯುವ ಎರಡು ಹಸುಗಳನ್ನು ಹಿಡಿದುಕೊಂಡು ಬಂಡಿಗೆ ಹೂಡಿ ಅವುಗಳ ಕರುಗಳನ್ನು ಮನೆಯಲ್ಲಿ ಕಟ್ಟಿಹಾಕಿದರು.11ಯೆಹೋವನ ಮಂಜೂಷವನ್ನೂ, ಚಿನ್ನದ ಇಲಿಗಳೂ, ಗಡ್ಡೆಗಳೂ ಇದ್ದ ಚಿಕ್ಕ ಪೆಟ್ಟಿಗೆಯನ್ನೂ ಬಂಡಿಯ ಮೇಲಿಟ್ಟರು.12ಕೂಡಲೆ ಆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.13ಬೇತ್ ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ಯೆಹೋವನ ಮಂಜೂಷವನ್ನು ನೋಡಿ ಬಹು ಸಂತೋಷಪಟ್ಟರು.14ಬಂಡಿಯು ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಂತಿತು. ಆಗ ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಆ ಹಸುಗಳನ್ನು ಯೆಹೋವನಿಗೆ ಯಜ್ಞಮಾಡಿದರು.15ಲೇವಿಯರು ಯೆಹೋವನ ಮಂಜೂಷವನ್ನೂ, ಚಿನ್ನದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟರು. ಬೇತ್ ಷೆಮೆಷಿನವರು ಅದೇ ದಿನ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಮತ್ತು ಯಜ್ಞಗಳನ್ನೂ ಸಮರ್ಪಿಸಿದರು.16ಇದನ್ನೆಲ್ಲಾ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.17ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗಳಿಗೂ18ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಅರಸುಗಳ ಅಧೀನದಲ್ಲಿದ್ದ ಎಲ್ಲಾ ಗ್ರಾಮ ನಗರಗಳ ಸಂಖ್ಯೆಗಳಿಗೂ ಸರಿಯಾಗಿದ್ದವು. ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಇರುವ ಯೆಹೋವನ ಮಂಜೂಷವೂ ಇಡಲ್ಪಟ್ಟ ಆ ದೊಡ್ಡ ಕಲ್ಲೇ ಇದಕ್ಕೆ ಸಾಕ್ಷಿಯಾಗಿ ಇಂದಿಗೂ ಇದೆ.19ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.ಕಿರ್ಯತ್ಯಾರೀಮಿನಲ್ಲಿ ದೇವರ ಮಂಜೂಷ
20ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು21 ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, <<ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ>> ಎಂದು ಹೇಳಿದರು.
71ಆಗ ಕಿರ್ಯತ್ಯಾರೀಮಿನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ, ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು, ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು.ಇಸ್ರಾಯೇಲ್ಯರು ದೇವರ ಕಡೆಗೆ ತಿರುಗಿಕೊಂಡದ್ದು; ಫಿಲಿಷ್ಟಿಯರು ಅಪಜಯಹೊಂದಿದ್ದು
2ಮಂಜೂಷವು ಕಿರ್ಯಾತ್ಯಾರೀಮಿಗೆ ಬಂದು ಬಹಳ ದಿನಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದು ಹೋದವು. ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ದುಃಖಿಸುತ್ತಾ ಯೆಹೋವನ ಕಡೆಗೆ ತಿರುಗಿಕೊಳ್ಳಲು ಹಂಬಲಿಸುತ್ತಿದ್ದರು.3ಆಗ ಸಮುವೇಲನು ಅವರಿಗೆ, << ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು>> ಅಂದನು.4ಹಾಗೆಯೇ ಇಸ್ರಾಯೇಲ್ಯರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಯೆಹೋವನೊಬ್ಬನನ್ನೇ ಆರಾಧಿಸತೊಡಗಿದರು.5ಸಮುವೇಲನು ತಿರುಗಿ ಅವರಿಗೆ, <<ಇಸ್ರಾಯೇಲ್ಯರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು>> ಅಂದನು.6ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, <<ನಾವು ನಿನಗೆ ದ್ರೋಹಿಗಳಾಗಿದ್ದೇವೆ>> ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.7ಇಸ್ರಾಯೇಲ್ಯರು ಮಿಚ್ಪೆಯಲ್ಲಿ ಕೂಡಿಬಂದಿದ್ದಾರೆ ಎಂದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ರಾಜರು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟರು. ಇದನ್ನು ತಿಳಿದ ಇಸ್ರಾಯೇಲರು ಬಹಳವಾಗಿ ಭಯಪಟ್ಟು ಸಮುವೇಲನಿಗೆ,8<<ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ>> ಅಂದರು.9ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು.10ಹೇಗೆಂದರೆ, ಸಮುವೇಲನು ಯಜ್ಞವನ್ನು ಅರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಕ್ಕೋಸ್ಕರ ಸಮೀಪಿಸಲಾಗಿ, ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲರಿಗೆ ಸೋತು ಓಡಿ ಹೋಗುವಂತೆ ಮಾಡಿದನು.11ಇಸ್ರಾಯೇಲ್ಯರಾದರೋ ಮಿಚ್ಪೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ತಗ್ಗಿನವರೆಗೆ ಅವರನ್ನು ಹತಮಾಡಿದರು.12ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, <<ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದ್ದಾನೆ>> ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.13ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರುಗಿ ಇಸ್ರಾಯೇಲ್ಯರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.14ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನ ವರೆಗೆ ಇಸ್ರಾಯೇಲರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು.15ಸಮುವೇಲನು ಜೀವದಿಂದ ಇರುವವರೆಗೆ ಇಸ್ರಾಯೇಲರಿಗೆ ನ್ಯಾಯತೀರಿಸುತ್ತಿದ್ದನು.16ಅವನು ಇಸ್ರಾಯೇಲರ ನ್ಯಾಯಗಳನ್ನು ತೀರಿಸುವುದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರುಗಿ ಬರುತ್ತಿದ್ದನು.17ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.
8ಇಸ್ರಾಯೇಲರು ತಮಗೊಬ್ಬ ಅರಸನು ಬೇಕೆಂದು ಬೇಡಿಕೊಂಡಿದ್ದು
1ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಾಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.2ಅವನ ಮೊದಲನೆಯ ಮಗನ ಹೆಸರು ಯೋವೇಲ್, ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಸ್ಥಾಪಕರಾಗಿದ್ದರು.3ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.4ಆದ್ದರಿಂದ ಇಸ್ರಾಯೇಲರ ಹಿರಿಯರೆಲ್ಲರೂ ಸೇರಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು5ಅವನಿಗೆ, <<ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ>> ಅಂದರು.6ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇಮಿಸಿಕೊಡು ಎಂಬ ಅವರ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಿದನು.7ಆಗ ಯೆಹೋವನು ಸಮುವೇಲನಿಗೆ, <<ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.8ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ, ಹಾಗೆಯೇ ನಿನಗೂ ಮಾಡುತ್ತಾರೆ.9ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು>> ಎಂದು ಹೇಳಿದನು.10ಸಮುವೇಲನು ಅರಸನನ್ನು ನೇಮಿಸಿಕೊಡು ಎಂದು ಬೇಡಿಕೊಂಡ ಜನರಿಗೆ ಯೆಹೋವನ ಮಾತುಗಳನ್ನೆಲ್ಲಾ ತಿಳಿಸಿ ಅವರಿಗೆ,11<< ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.12ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು.13ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯ ಮಾಡುವುದಕ್ಕೂ, ಅಡಿಗೆಮಾಡುವುದಕ್ಕೂ, ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು.14 ನಿಮ್ಮ ಉತ್ತಮವಾದ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.15ನಿಮ್ಮ ಧಾನ್ಯ, ದ್ರಾಕ್ಷಿಗಳಲ್ಲಿ ಹತ್ತರಷ್ಟನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ, ಪರಿವಾರದವರಿಗೂ ಕೊಡುವನು.16ನಿಮ್ಮ ದಾಸದಾಸಿಯರನ್ನೂ, ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸ ಮಾಡುವುದಕ್ಕಾಗಿ ತೆಗೆದುಕೊಳ್ಳುವನು.17ಕುರಿಹಿಂಡುಗಳಲ್ಲಿ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು. ನೀವು ಅವನಿಗೆ ದಾಸರಾಗಿರಬೇಕು.18ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ. ಆಗ ಆತನು ನಿಮ್ಮನ್ನು ಲಕ್ಷಿಸುವುದಿಲ್ಲ>> ಅಂದನು.19ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, <<ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು;20ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು>> ಎಂದು ಹೇಳಿದರು.21ಸಮುವೇಲನು ಜನರ ಈ ಎಲ್ಲಾ ಮಾತುಗಳನ್ನು ಯೆಹೋವನಿಗೆ ತಿಳಿಸಲಾಗಿ22ಆತನು ಅವನಿಗೆ, << ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು>> ಎಂದನು. ಆಗ ಸಮುವೇಲನು ಇಸ್ರಾಯೇಲರಿಗೆ, <<ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ>> ಎಂದು ಅಪ್ಪಣೆಕೊಟ್ಟನು.
9ಸೌಲ ಮತ್ತು ಸಮುವೇಲರ ಭೇಟಿ
1ಬೆನ್ಯಾಮೀನ್ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತ ಮತ್ತು ಪ್ರಭಾವಶಾಲಿಯಾದ ಮನುಷ್ಯನಿದ್ದನು. ಕೀಷನು ಅಬೀಯೇಲನ ಮಗ, ಅಬೀಯೇಲನು ಚೆರೋರನ ಮಗ, ಬೆಕೋರತನ ಮೊಮ್ಮಗ ಹಾಗೂ ಅಫೀಹನ ಮರಿಮಗನು.2ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಯೌವನಸ್ಥನೂ, ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿಸುಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾಗಿದ್ದನು.3ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದುದರಿಂದ ಅವನು ತನ್ನ ಮಗನಾದ ಸೌಲನಿಗೆ, <<ನೀನೆದ್ದು ಆಳುಗಳಲ್ಲಿ ಒಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವುದಕ್ಕೆ ಹೋಗು>> ಎಂದು ಹೇಳಿದನು.4ಅದರಂತೆಯೇ ಅವನು ಹೊರಟು ಎಫ್ರಾಯೀಮ್ ಪರ್ವತಪ್ರಾಂತ್ಯ, ಶಾಲಿಷಾ ದೇಶ ಇವುಗಳಲ್ಲಿ ಸಂಚರಿಸಿ ಹುಡುಕಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ್ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.5ಕಡೆಗೆ ಅವರು ಚೂಫ್ ದೇಶಕ್ಕೆ ಬಂದಾಗ ಸೌಲನು ತನ್ನ ಆಳಿಗೆ, <<ಹಿಂದಿರುಗಿ ಹೋಗೋಣ ನಡಿ; ನಮ್ಮ ತಂದೆಯು ಈಗ ಕತ್ತೆಗಳ ಚಿಂತೆ ಬಿಟ್ಟು ನಮ್ಮ ಚಿಂತೆಯಲ್ಲಿರಬಹುದು>> ಅಂದನು6ಆದರೆ ಆ ಆಳು, <<ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು>> ಎಂದನು.7ಅದಕ್ಕೆ ಸೌಲನು, <<ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?>> ಎನ್ನಲು8ಆಳು, <<ಇಗೋ, ನನ್ನ ಕೈಯಲ್ಲಿ ಒಂದು ಪಾವಲಿಯಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು>> ಎಂದು ಉತ್ತರಕೊಟ್ಟನು.9(ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ <<ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ>> ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.)10ಆಗ ಸೌಲನು ಆಳಿಗೆ, <<ನೀನು ಹೇಳುವುದು ಒಳ್ಳೆಯದು; ಹೋಗೋಣ ನಡಿ>> ಅಂದನು.11ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, <<ದರ್ಶಿಯು ಊರಲ್ಲಿದ್ದಾನೋ>> ಎಂದು ಕೇಳಿದರು. ಅವರು, <<ಇದ್ದಾನೆ;12ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ.13ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ>> ಅಂದರು.14ಅವರು ಮೇಲೆ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೋಗುವುದಕ್ಕೋಸ್ಕರ ಹೊರಟು ಅವರೆದುರಿಗೆ ಬಂದನು.15ಸೌಲನು ಬರುವುದಕ್ಕೆ ಒಂದು ದಿನ ಮುಂದಾಗಿ ಯೆಹೋವನು ಸಮುವೇಲನಿಗೆ,16<<ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ>> ಎಂದು ತಿಳಿಸಿದ್ದನು.17ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, <<ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು>> ಎಂದು ಸೂಚಿಸಿದನು.18ಊರಬಾಗಿಲಿಗೆ ಬಂದ ಸೌಲನು ತನ್ನ ಎದುರಿನಲ್ಲಿ ಸಮುವೇಲನನ್ನು ನೋಡಿ, <<ದರ್ಶಿಯ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿಯೋ?>> ಎನ್ನಲು ಸಮುವೇಲನು, <<ನಾನೇ ಆ ದರ್ಶಿ.19ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.20ಮೂರು ದಿನಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಇಸ್ರಾಯೇಲರ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು, ನಿನ್ನ ಮತ್ತು ನಿನ್ನ ತಂದೆಯ ಕುಟುಂಬದವರಿಗೂ ಸಲ್ಲುವುದು>> ಎಂದು ಹೇಳಿದನು.21ಅದಕ್ಕೆ ಸೌಲನು, <<ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ?>> ಎಂದನು.22ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರೆದುಕೊಂಡು ಹೋದನು; ಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ,23<<ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು>> ಅಂದನು.24ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, <<ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು, ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು>> ಎಂದು ಸೌಲನಿಗೆ ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.25ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.26ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, <<ಏಳು, ನಿನ್ನನ್ನು ಕಳುಹಿಸಿ ಕೊಡುತ್ತೇನೆ>> ಎಂದು ಎಬ್ಬಿಸಲು ಅವನು ಎದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ27ಸಮುವೇಲನು ಸೌಲನಿಗೆ, <<ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು>> ಎಂದನು.
10ಸೌಲನಿಗೆ ರಾಜ್ಯಾಭಿಷೇಕವಾದದ್ದು
1ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, <<ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.2ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ. ಅವರು ನಿನಗೆ, <ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನು ಎಲ್ಲಿ ಹೋದನು ಎಂಬುದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ> ಎಂದು ಹೇಳುವರು.3ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.4ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ನಿನಗೆ ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು.5ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.6ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ.7ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ.8ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು>> ಎಂದು ಹೇಳಿದನು.9ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಹೃದಯವನ್ನು ಕೊಟ್ಟನು. ಅದೇ ದಿನದಲ್ಲಿ ಆ ಎಲ್ಲಾ ಗುರುತುಗಳು ಸಂಭವಿಸಿದವು.10ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು.11ಅವನು ಪರವಶನಾಗಿ ಮಾತನಾಡುವುದನ್ನು ಅವನ ಪರಿಚಿತರು ಕಂಡು ತಮ್ಮ ತಮ್ಮೊಳಗೆ, <<ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೋ?>> ಎಂದು ಮಾತನಾಡಿಕೊಳ್ಳುತ್ತಿದ್ದರು.12ಆಗ ಆ ಸ್ಥಳದವನೊಬ್ಬನು, <<ಹಾಗಾದರೆ ಇವರ ತಂದೆ ಯಾರು?>> ಎಂದು ಕೇಳಿದನು. ಈ ಸಂಗತಿಯಿಂದ <<ಸೌಲನು ಪ್ರವಾದಿಗಳಲ್ಲಿದ್ದಾನೆ>> ಎಂಬ ವಿಷಯ ಹುಟ್ಟಿತು.13ಅವನು ಪ್ರವಾದಿಸಿದ ನಂತರ ಬೆಟ್ಟದ ಮೇಲಿದ್ದ ಯಜ್ಞವೇದಿಯ ಬಳಿಗೆ ಬಂದನು.14ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ, <<ನೀವು ಎಲ್ಲಿಗೆ ಹೋಗಿದ್ದಿರಿ?>> ಎಂದು ಕೇಳಲು ಅವನು, <<ಕತ್ತೆಗಳನ್ನು ಹುಡುಕುವುದಕ್ಕೆ ಹೋಗಿದ್ದೆವು. ಅವು ಸಿಕ್ಕಲಿಲ್ಲವಾದ್ದರಿಂದ ಸಮುವೇಲನ ಬಳಿಗೆ ಹೋದೆವು>> ಅಂದನು.15<<ಸಮುವೇಲನು ಏನು ಹೇಳಿದನು?>> ಎಂದು ಚಿಕ್ಕಪ್ಪನು ಕೇಳಲು16ಸೌಲನು, <<ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು>> ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.ಚೀಟುಹಾಕಿ ಸೌಲನನ್ನು ಅರಸನನ್ನಾಗಿ ಆರಿಸಿಕೊಂಡದ್ದು
17ಸಮುವೇಲನು ಇಸ್ರಾಯೇಲ್ಯರನ್ನು ಮಿಚ್ಪೆಗೆ ಕರೆಯಿಸಿ ಯೆಹೋವನ ಸನ್ನಿಧಿಯಲ್ಲಿ ಸೇರಿಸಿಕೊಂಡನು.18ಆತನು ಅವರಿಗೆ, ಇಸ್ರಾಯೇಲ್ ದೇವರಾದ ಯೆಹೋವನು ಹೇಳುವುದನ್ನು ಕೇಳಿರಿ, <<ನೀವು ಐಗುಪ್ತರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ, ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ.19ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ>> ಎಂದು ಅಪ್ಪಣೆ ಮಾಡಿದನು.20 ಸಮುವೇಲನು ಇಸ್ರಾಯೇಲ್ಯರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟುಬಿದ್ದಿತು.21ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟುಬಿದ್ದಿತು. ಆದರೆ ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ.22ಅವರು, <<ಆ ಮನುಷ್ಯನು ಇಲ್ಲಿಗೆ ಬರುವನೋ>> ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, <<ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ>> ಎಂದು ಉತ್ತರಕೊಟ್ಟನು.23ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯದಲ್ಲಿ ನಿಲ್ಲಿಸಿದರು. ಗುಂಪಿನಲ್ಲಿದ್ದ ಎಲ್ಲಾ ಜನರಿಗಿಂತ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದ ಪುರುಷನಾಗಿದ್ದನು.24ಆಗ ಸಮುವೇಲನು ಎಲ್ಲಾ ಜನರಿಗೆ, <<ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ>> ಎನ್ನಲು ಜನರೆಲ್ಲರೂ, <<ಅರಸನು ಚಿರಂಜೀವಿಯಾಗಿರಲಿ>> ಎಂದು ಘೋಷಣೆಗಳನ್ನು ಕೂಗಿದರು.25ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಆ ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.26ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.27ಕೆಲವು ಮಂದಿ ಅಯೋಗ್ಯರು, <<ಇವನು ನಮ್ಮನ್ನು ರಕ್ಷಿಸುವನೋ?>> ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.
11ಸೌಲನು ಅಮ್ಮೋನಿಯರನ್ನು ಸೋಲಿಸಿದ್ದು
1ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, <<ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು>> ಎಂದು ಬೇಡಿಕೊಂಡರು.2ಅದಕ್ಕೆ ಅವನು, <<ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ>> ಎಂದು ಉತ್ತರಕೊಟ್ಟನು.3ಆಗ ಯಾಬೇಷಿನ ಹಿರಿಯರು ಅವನಿಗೆ, <<ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ>> ಎಂದು ತಿಳಿಸಿದರು.4ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.5ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, <<ಜನರು ಗೋಳಾಡುವುದಕ್ಕೆ ಕಾರಣವೇನು?>> ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.6ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.7ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, <<ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು>> ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.8ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.9ಅವರು ಬಂದಿದ್ದ ದೂತರಿಗೆ, <<ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ>> ಎಂದು ಹೇಳಿ ಅವರನ್ನು ಕಳುಹಿಸಿದರು.10ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ, <<ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿ ಕಾಣುವ ಪ್ರಕಾರ ಮಾಡಿರಿ>> ಎಂದು ಹೇಳಿದರು.11ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.12ತರುವಾಯ ಜನರು ಸಮುವೇಲನಿಗೆ, <<ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ>> ಎಂದರು.13ಸೌಲನು ಅವರಿಗೆ, <<ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು>> ಎಂದು ಹೇಳಿದನು.14ಸಮುವೇಲನು ಜನರಿಗೆ, <<ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ>> ಅನ್ನಲು15ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.
12ಸಮುವೇಲನ ಬೀಳ್ಕೊಡುಗೆಯ ಭಾಷಣ
1ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ, <<ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ ನಿಮಗೊಬ್ಬ ಅರಸನನ್ನು ನೇಮಿಸಿದೆನು.2 ಇನ್ನು ಮುಂದೆ ಇವನೇ ನಿಮ್ಮ ಅರಸನಾಗಿರುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮೊಂದಿಗಿದ್ದಾರೆ.3ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ>> ಅಂದನು.4ಅವರು, <<ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ, ನಮ್ಮಿಂದ ಏನಾದರೂ ಕಸಿದುಕೊಂಡದ್ದಾಗಲಿ ಇರುವುದಿಲ್ಲ>> ಎಂದು ಉತ್ತರ ಕೊಟ್ಟರು.5ಸಮುವೇಲನು ಪುನಃ <<ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲ ಎಂಬುದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ>> ಎಂದನು. ಅವರು, <<ಹೌದು, ಯೆಹೋವನೇ ಸಾಕ್ಷಿಯಾಗಿದ್ದಾನೆ>> ಎಂದು ಹೇಳಿದರು.6ಆಗ ಸಮುವೇಲನು, <<ನಿಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರೆತರುವುದಕ್ಕಾಗಿ ಮೋಶೆ ಹಾಗೂ ಆರೋನರನ್ನು ನೇಮಿಸಿದ ಯೆಹೋವನೇ ಇದಕ್ಕೆ ಸಾಕ್ಷಿ.7ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ, ನಿಮ್ಮ ಪೂರ್ವಿಕರಿಗೋಸ್ಕರವೂ ನಡೆಸಿದ ನೀತಿಕಾರ್ಯಗಳನ್ನು ಕುರಿತು ಆತನ ಎದುರಿನಲ್ಲಿ ನಿಮ್ಮ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ.8ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಿಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ, ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.9ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು.10ಆಗ ಅವರು ಯೆಹೋವನಿಗೆ, <ನಾವು ಯೆಹೋವನಾದ ನಿನ್ನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸು; ನಾವು ಇನ್ನು ಮುಂದೆ ನಿನ್ನನ್ನೇ ಸೇವಿಸುವೆವು> ಎಂದು ಮೊರೆಯಿಟ್ಟರು.11ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.12ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, <ನಮಗೊಬ್ಬ ಅರಸನನ್ನು ನೇಮಿಸು> ಎಂದು ನನ್ನನ್ನು ಬೇಡಿಕೊಂಡಿರಿ.13ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾನೆ.14 ನೀವೂ, ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ಆತನಿಗೆ ವಿಧೇಯರಾಗಿ, ಆತನನ್ನು ಸೇವಿಸುತ್ತಾ, ತಪ್ಪದೆ ಆತನ ಮಾತನ್ನು ಪಾಲಿಸುವವರಾಗಿ, ಆತನನ್ನೇ ಹೊಂದಿಕೊಂಡಿರುವುದಾದರೆ ಎಷ್ಟೋ ಒಳ್ಳೆಯದು.15ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.16 ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.17ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು>> ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.18ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು19ಸಮುವೇಲನನ್ನು, <<ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ>> ಎಂದು ವಿಜ್ಞಾಪಿಸಲು20ಅವನು, <<ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.21 ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.22 ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.23ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.24ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;25ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ>> ಎಂದು ಹೇಳಿದನು.
13ಇಸ್ರಾಯೇಲ್ಯರ ಮತ್ತು ಫಿಲಿಷ್ಟಿಯರ ಯುದ್ಧ
1ಸೌಲನು ಅರಸನಾದಾಗ ಮೂವತ್ತು ವರ್ಷದವನಾಗಿದ್ದನು. ಅವನು ಇಸ್ರಾಯೇಲರನ್ನು ಎರಡು ವರ್ಷಗಳ ಕಾಲ ಆಳಿದನು.2ಅವನು ಇಸ್ರಾಯೇಲರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡನು, ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯೂ, ಬೇತೇಲಿನ ಗುಡ್ಡದಲ್ಲಿಯೂ ಇದ್ದರು. ಒಂದು ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಉಳಿದ ಇಸ್ರಾಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.3ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು <<ಎಲ್ಲಾ ಇಬ್ರಿಯರು ಕೇಳಲಿ>> ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.4ಸೌಲನು ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.5ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.6ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.7ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ, ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತ ಅವನನ್ನು ಹಿಂಬಾಲಿಸಿದರು.8ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿನ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.ಸೌಲನ ಅವಿಧೇಯತೆ ಮತ್ತು ಸಮುವೇಲನು ಗದರಿಸಿದ್ದು
9ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ, ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.10ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕೋಸ್ಕರ ಎದುರಿಗೆ ಹೋಗಲು11ಸಮುವೇಲನು ಅವನನ್ನು, <<ಇದೇನು ನೀನು ಮಾಡಿದ್ದು?>> ಎಂದು ಕೇಳಲು ಅವನು, <<ಜನರು ಚದರಿಹೋಗುವುದನ್ನೂ, ನೀನು ನಿಯಮಿತಕಾಲದಲ್ಲಿ ಬಾರದಿರುವುದನ್ನೂ, ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನೂ ನೋಡಿದೆನು.12ಆಗ ನಾನು <ಫಿಲಿಷ್ಟಿಯರು ಗಿಲ್ಗಾಲಿನಲ್ಲಿರುವ ನನ್ನ ಬಳಿಗೆ ಬಂದು ನನ್ನ ಮೇಲೆ ಬಿದ್ದಾರು, ನಾನು ಯೆಹೋವನ ದಯೆಯನ್ನು ಬೇಡಿಕೊಳ್ಳಲಿಲ್ಲ> ಎಂದು, ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಮುಂದಾದೆನು>> ಅಂದನು.13ಆಗ ಸಮುವೇಲನು, <<ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.14ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ>> ಎಂದು ಹೇಳಿದನು.15ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು.ಆಯುಧ ರಹಿತರಾದ ಇಸ್ರಾಯೇಲ್ಯರು
16ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಲೆಕ್ಕಿಸಿದಾಗ ಆರು ನೂರು ಪುರುಷರಿದ್ದರು. ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳಿದುಕೊಂಡರು. ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು.17ಸುಲಿಗೆ ಮಾಡುವುದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು, ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ನಾಡಿಗೂ,18ಇನ್ನೊಂದು ಗುಂಪು ಬೇತ್‌ಹೋರೋನಿನ ಕಡೆಗೂ, ಮತ್ತೊಂದು ಜೆಬೋಯೀಮಿನ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು.19ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.20ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹರಿತ ಮಾಡಿಸುವುದಕ್ಕೆ ಫಿಲಿಷ್ಟಿಯರ ಹತ್ತಿರವೇ ಹೋಗಬೇಕಿತ್ತು.21ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕೋಸ್ಕರ ಅವರಲ್ಲಿ ಹರಿತ ಮಾಡುವ ಕಲ್ಲು ಮಾತ್ರ ಇತ್ತು.22ಹೀಗಿರುವುದರಿಂದ ಯುದ್ಧ ಪ್ರಾರಂಭಿಸಿದಾಗ ಸೌಲ ಮತ್ತು ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ, ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ.ಯೋನಾತಾನನ ಶೌರ್ಯ
23ಫಿಲಿಷ್ಟಿಯರ ಕಾವಲುದಂಡು ಮಿಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.
141ಒಂದು ದಿನ ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, <<ಆಚೆ ಇರುವ ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೋಗೋಣ ಬಾ>> ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.2ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬೆ ವೃಕ್ಷದ ಅಡಿಯಲ್ಲಿ ತಂಗಿದ್ದನು. ಅವನ ಜೊತೆಯಲ್ಲಿ ಸುಮಾರು ಆರು ನೂರು ಮಂದಿ ಸೈನಿಕರೂ,3 ಏಫೋದನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದರು. ಆ ಅಹೀಯನು ಶೀಲೋವಿನಲ್ಲಿ ಯೆಹೋವನ ಯಾಜಕನಾಗಿದ್ದ ಏಲಿಯ ಮರಿಮಗನೂ, ಫೀನೆಹಾಸನ ಮೊಮ್ಮಗನೂ, ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.4ಅವನು ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೊರಟಾಗ, ಕಣಿವೆಯ ಮಾರ್ಗದ ಎರಡು ಕಡೆಗಳಲ್ಲಿ ಬೋಚೇಚ್, ಸೆನೆ ಎಂಬ ಎರಡು ಕಡಿದಾದ ಬಂಡೆಗಳು ಇದ್ದವು.5ಅದರಲ್ಲಿ ಒಂದು ಬಂಡೆ ಉತ್ತರದಿಕ್ಕಿಗೆ ಎತ್ತರವಾಗಿ ಮಿಕ್ಮಾಷಿಗೂ, ಮತ್ತೊಂದು ದಕ್ಷಿಣದಿಕ್ಕಿನ ಗೆಬಕ್ಕೆ ಎದುರಾಗಿದ್ದವು.6ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, <<ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ>> ಎಂದು ಹೇಳಿದನು.7ಆಯುಧಗಳನ್ನು ಹೊರುವ ಸೇವಕನು, <<ನಿನ್ನ ಮನಸ್ಸಿನಂತೆ ಮಾಡು, ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ>> ಅಂದನು.8ಆಗ ಯೋನಾತಾನನು ಅವನಿಗೆ, <<ಅವರು ನಮ್ಮನ್ನು ಕಾಣುವಂತೆ ಸಮೀಪಕ್ಕೆ ಹೋಗೋಣ.9<ನಾವು ನಿಮ್ಮ ಬಳಿಗೆ ಬರುವ ತನಕ ಅಲ್ಲೇ ನಿಲ್ಲಿರಿ> ಎಂದು ಅವರು ನಮಗೆ ಹೇಳಿದರೆ ಮೇಲೆ ಹತ್ತದೆ ಇದ್ದ ಸ್ಥಳದಲ್ಲೇ ಇರೋಣ.10ಆದರೆ ಅವರು, <ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ> ಎಂದು ನಮ್ಮನ್ನು ಕರೆದರೆ ಯೆಹೋವನು ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾನೆ ಎಂಬುದಕ್ಕೆ ಇದೇ ಗುರುತು ಎಂದು ತಿಳಿದು ಮೇಲೆ ಹೋಗೋಣ>> ಎಂದನು.11ಇವರಿಬ್ಬರೂ ಫಿಲಿಷ್ಟಿಯರ ಕಾವಲು ದಂಡಿನವರಿಗೆ ಕಾಣಿಸಿಕೊಂಡಾಗ ಅವರು, <<ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ>> ಎಂದು ತಮ್ಮೊಳಗೆ ಮಾತನಾಡಿಕೊಂಡರು.12ಅವರು ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ, <<ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ತೋರಿಸಿಬೇಕಾದ ಕಾರ್ಯ ಬಂದಿದೆ>> ಎಂದರು. ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, <<ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ>> ಎಂದು ಹೇಳಿದನು.13ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಮತ್ತು ಮೊಣಕಾಲುಗಳ ಸಹಾಯದಿಂದ ಗಟ್ಟಾ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ ಹೋದನು. ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ಹೋದನು.14ಯೋನಾತಾನನು ಅವನ ಸೇವಕನು ಮಾಡಿದ ಮೊದಲ ದಾಳಿಯಲ್ಲಿ ಸುಮಾರು ಇಪ್ಪತ್ತು ಜನರು ಅರ್ಧ ಎಕರೆ ಭೂಮಿಯಲ್ಲಿ ಸತ್ತುಹೋದರು.ಫಿಲಿಷ್ಟಿಯರ ಅಪಜಯ
15ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.16ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು.17ಸೌಲನು ತನ್ನ ಜೊತೆಯಲ್ಲಿದ್ದವರಿಗೆ, <<ನಮ್ಮನ್ನು ಬಿಟ್ಟುಹೋದವರು ಯಾರೆಂಬುದನ್ನು ಲೆಕ್ಕಮಾಡಿ ನೋಡಿರಿ>> ಎಂದು ಆಜ್ಞಾಪಿಸಿದನು. ಅವರು ಲೆಕ್ಕಮಾಡಿ ನೋಡಿದಾಗ ಯೋನಾತಾನನೂ, ಅವನ ಆಯುಧಗಳನ್ನು ಹೊರುವ ಸೇವಕನೂ ಇಲ್ಲವೆಂದು ತಿಳಿದುಬಂದಿತು.18ಅನಂತರ ಸೌಲನು ಅಹೀಯನಿಗೆ, <<ಏಫೋದನ್ನು ತೆಗೆದುಕೊಂಡು ಬಾ>> ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.19 ಸೌಲನು ಯಾಜಕನೊಡನೆ ಮಾತನಾಡುತ್ತಿರುವಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದ ಗದ್ದಲವು ಬಲು ಹೆಚ್ಚಾಯಿತು. ಆಗ ಸೌಲನು ಯಾಜಕನಿಗೆ, <<ನಿನ್ನ ಕೈಯನ್ನು ತೆಗೆ>> ಎಂದು ಹೇಳಿ20ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು. ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದರು.21ಇದಲ್ಲದೆ ಮೊದಲಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಇಬ್ರಿಯರು, ಸೌಲ ಮತ್ತು ಯೋನಾತಾನರ ಜೊತೆಯಲ್ಲಿ ಬಂದ ಇಸ್ರಾಯೇಲರನ್ನು ಕೂಡಿಕೊಂಡರು.22ಎಫ್ರಾಯೀಮಿನ ಪರ್ವತ ಪ್ರಾಂತ್ಯದಲ್ಲಿ ಅಡಗಿಕೊಂಡಿದ್ದ ಇಸ್ರಾಯೇಲರಿಗೆ ಫಿಲಿಷ್ಟಿಯರು ಓಡಿಹೋದರೆಂಬ ವರ್ತಮಾನವು ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು.23ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯವರೆಗೂ ನಡೆಯಿತು.ಸೌಲನ ಬುದ್ಧಿಹೀನ ಆಜ್ಞೆ
24ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, <<ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ>> ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.25 ಸೈನ್ಯದವರೆಲ್ಲರೂ ನೆಲಜೇನು ಇರುವ ಕಾಡಿಗೆ ಬಂದರು.26ಅವರು ಅಲ್ಲಿ ಜೇನುತುಪ್ಪ ಹರಿಯುವುದನ್ನು ಕಂಡರೂ ಶಾಪಕ್ಕೆ ಭಯಪಟ್ಟದರಿಂದ ಯಾವನೂ ಅದನ್ನು ಬಾಯೊಳಗೆ ಹಾಕಲಿಲ್ಲ.27ಯೋನಾತಾನನಿಗೆ ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ, ಕೈಯಿಂದ ತೆಗೆದು ತಿನ್ನಲು ಅವನ ಕಣ್ಣುಗಳು ಕಳೆಗೊಂಡವು.28ಕೂಡಲೆ ಒಬ್ಬನು ಅವನಿಗೆ, <<ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ>> ಎಂದು ತಿಳಿಸಿದನು.29ಜನರು ಬಹಳವಾಗಿ ಬಳಲಿ ಹೋದದ್ದನ್ನು ಕಂಡು ಯೋನಾತಾನನು ಆ ಮನುಷ್ಯನಿಗೆ, <<ನನ್ನ ತಂದೆಯು ದೇಶದಲ್ಲಿ ಇಕ್ಕಟ್ಟನ್ನು ಉಂಟುಮಾಡಿದ್ದಾನೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದದ್ದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು.30ಜನರು ತಾವು ಇಂದು ಶತ್ರುಗಳಿಂದ ಸುಲಿದುಕೊಂಡ ಆಹಾರವನ್ನು ಯಥೇಚ್ಛವಾಗಿ ಊಟಮಾಡಿದ್ದರೆ ಅವರು ಇನ್ನಷ್ಟು ಬಲಗೊಳ್ಳುತ್ತಿದ್ದರು. ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನೂ ಹೆಚ್ಚು ಮಂದಿ ಇದ್ದಾರೆ>> ಅಂದನು.31ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನ ವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು.32ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸವನ್ನು ರಕ್ತದೊಡನೆ ತಿಂದರು.33ಆಗ ಕೆಲವರು ಸೌಲನಿಗೆ, <<ನೋಡು, ಜನರು ರಕ್ತದೊಂದಿಗೆ ಊಟಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡುತ್ತಾರೆ>> ಎಂದು ತಿಳಿಸಿದರು. ಸೌಲನು ಅವರಿಗೆ, <<ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ದೊಡ್ಡ ಕಲ್ಲೊಂದನ್ನು ಹೊರಳಿಸಿ ತಂದಿಟ್ಟು;34ಜನರ ಬಳಿಗೆ ಹೋಗಿ ಅವರಿಗೆ, <ರಕ್ತದೊಂದಿಗೆ ಭೋಜನ ಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಬೇಡಿರಿ; ನಿಮ್ಮ ನಿಮ್ಮ ಎತ್ತು ಕುರಿಗಳನ್ನು ಇಲ್ಲಿ ತಂದು, ಕೊಂದು ತಿನ್ನಬೇಕೆಂದು ಹೇಳಿರಿ> >> ಅಂದನು. ಹಾಗೆಯೇ ಜನರೆಲ್ಲರೂ ತಮ್ಮ ತಮ್ಮ ಎತ್ತು ಕುರಿಗಳನ್ನು ಅದೇ ರಾತ್ರಿ ಅಲ್ಲಿಗೆ ತಂದು ಕೊಂದು ತಿಂದರು.35ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು.36ಸೌಲನು ತನ್ನ ಸೈನಿಕರನ್ನು, <<ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ, ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು, ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ>> ಎಂದು ಕರೆದನು. ಅವರು, <<ನಿನ್ನ ಇಷ್ಟದಂತೆ ಆಗಲಿ>> ಎಂದು ಹೇಳಿದರು. ಆದರೆ ಯಾಜಕನು, <<ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ>> ಎಂದನು.37ಆಗ ಸೌಲನು, <<ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ?>> ಎಂದು ಕೇಳಿಕೊಂಡರೂ ದೇವರು ಅವನಿಗೆ ಆ ದಿನ ಉತ್ತರಕೊಡಲೇ ಇಲ್ಲ.38ಆಗ ಸೌಲನು ಪ್ರಜೆಗಳ ಮುಖಂಡರಿಗೆ, <<ನೀವೆಲ್ಲರೂ ಇಲ್ಲಿ ಬಂದು, ಈ ಹೊತ್ತು ಪಾಪ ಯಾವುದರಿಂದ ಉಂಟಾಯಿತು ಎಂದು ವಿಚಾರಿಸಿ ಗೊತ್ತುಮಾಡಿರಿ.39 ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು>> ಎಂದು ಹೇಳಿದನು; ಜನರು ಏನೂ ಮಾತನಾಡದೆ ಮೌನವಾಗಿದ್ದರು.40ಆಗ ಸೌಲನು ಅವರಿಗೆ, <<ನೀವೆಲ್ಲರೂ ಒಂದು ಕಡೆ ನಿಲ್ಲಿರಿ; ನಾನೂ ನನ್ನ ಮಗನಾದ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು>> ಅನ್ನಲು ಅವರು, <<ನಿನ್ನ ಇಷ್ಟದಂತೆ ಆಗಲಿ>> ಅಂದರು.41ಅನಂತರ ಸೌಲನು, << ಇಸ್ರಾಯೇಲ್ಯರ ದೇವರೇ, ಸತ್ಯವನ್ನು ತಿಳಿಸು>> ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಾಗ ಅದು ಅವನಿಗೂ ಯೋನಾತಾನನಿಗೂ ಬಂದಿತು, ಜನರು ಪಾರಾದರು.42ಸೌಲನು ಪುನಃ, <<ನಮ್ಮಿಬ್ಬರೊಳಗೆ ಚೀಟು ಹಾಕಿರಿ>> ಎಂದು ಹೇಳಿದನು. ಹಾಗೆಯೇ ಮಾಡಿದಾಗ ಚೀಟು ಯೋನಾತಾನನಿಗೆ ಬಿದ್ದಿತು.43ಆಗ ಸೌಲನು ಯೋನಾತಾನನನ್ನು, <<ನೀನು ಏನು ಮಾಡಿದಿ, ಹೇಳು>> ಎಂದು ಕೇಳಲು ಅವನು, <<ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆನು; ನಾನು ಸಾಯುವುದಕ್ಕೆ ಸಿದ್ಧನಾಗಿದ್ದೇನೆ>> ಎಂದು ಉತ್ತರಕೊಟ್ಟನು.44ಅದಕ್ಕೆ ಸೌಲನು, <<ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ>> ಎಂದನು.45ಜನರು ಅವನಿಗೆ, <<ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು>> ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು.46ಸೌಲನು ಆ ಮೇಲೆ ಫಿಲಿಷ್ಟಿಯರನ್ನು ಹಿಂದಟ್ಟದೆ ತನ್ನ ಮನೆಗೆ ಹೋದನು. ಫಿಲಿಷ್ಟಿಯರೂ ತಮ್ಮ ಪ್ರಾಂತ್ಯಕ್ಕೆ ಹೋದರು.ಸೌಲನ ಯುದ್ಧಗಳೂ ಅವನ ಕುಟುಂಬವೂ
47ಸೌಲನು ಇಸ್ರಾಯೇಲ್ಯರಿಗೆ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಅವನು ಹೋದ ಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.48ಇದಲ್ಲದೆ ಅವನು ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಪರಾಕ್ರಮದಿಂದ ಅವರನ್ನು ಸದೆಬಡಿದನು. ಇಸ್ರಾಯೇಲ್ಯರನ್ನು ಸುಲಿಗೆಮಾಡುವವರ ಕೈಗೆ ಸಿಕ್ಕದಂತೆ ತಪ್ಪಿಸಿದನು.49ಸೌಲನ ಗಂಡು ಮಕ್ಕಳು - ಯೋನಾತಾನ, ಇಷ್ವಿ ಮತ್ತು ಮಲ್ಕೀಷೂವ. ಅವನ ಹೆಣ್ಣು ಮಕ್ಕಳು - ಮೇರಬ್ ಮತ್ತು ಮೀಕಲ್.50ಅಹೀಮಾಚನ ಮಗಳಾದ ಅಹೀನೋವಮಳು ಸೌಲನ ಹೆಂಡತಿ. ನೇರನ ಮಗನಾದ ಅಬ್ನೇರನು ಅವನ ಸೇನಾಪತಿ. ನೇರನು ಸೌಲನು ಚಿಕ್ಕಪ್ಪನು.51ಸೌಲನ ತಂದೆಯಾದ ಕೀಷನೂ, ಅಬ್ನೇರನ ತಂದೆಯಾದ ನೇರನೂ ಅಬೀಯೇಲನ ಮಕ್ಕಳು.52ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಘೋರ ಯುದ್ಧವಾಗುತ್ತಿದ್ದುದ್ದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡರೆ, ಕೂಡಲೆ ಅವನನ್ನು ತನ್ನ ಹತ್ತಿರ ಇಟ್ಟುಕೊಳ್ಳುತ್ತಿದ್ದನು.
15ಅಮಾಲೇಕ್ಯರೊಡನೆ ನಡೆದ ಯುದ್ಧ, ಸೌಲನ ಅವಿಧೇಯತೆ
1ಸಮುವೇಲನು ಸೌಲನಿಗೆ, <<ಯೆಹೋವನು ನಿನ್ನನ್ನು ತನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕೋಸ್ಕರ ನನ್ನನ್ನೇ ಕಳುಹಿಸಿದನಲ್ಲಾ; ಆತನು ಈಗ ಹೇಳುವುದನ್ನು ಕೇಳು.2ಸೇನಾಧೀಶ್ವರನಾದ ಯೆಹೋವನು ನಿನಗೆ, <ಇಸ್ರಾಯೇಲರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದ್ದನ್ನು ನೆನಪುಮಾಡಿಕೊಂಡು ನಾನು ಅವರಿಗೆ ಮುಯ್ಯಿತೀರಿಸುವೆನು.3ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ> >> ಅಂದನು.4ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನು ಕೂಡಿಸಿ ಲೆಕ್ಕಿಸಲು ಎರಡು ಲಕ್ಷ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತು ಸಾವಿರ ಜನರು ಇದ್ದರು.5ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೆ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚುಹಾಕುತ್ತಿದ್ದನು.6ಆದರೆ ಅವನು ಕೇನ್ಯರಿಗೆ, <<ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ. ಇಸ್ರಾಯೇಲರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ>> ಎಂದು ಹೇಳಿಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.7ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೆ ಅವರನ್ನು ಸಂಹರಿಸುತ್ತಾ ಹೋದನು.8ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು, ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.9ಸೌಲನೂ ಮತ್ತು ಇಸ್ರಾಯೇಲರೂ ಅಗಾಗನನ್ನೂ, ಉತ್ತಮವಾದ ಕುರಿದನಗಳನ್ನೂ, ಕುರಿಮರಿಗಳನ್ನೂ, ಕೊಬ್ಬಿದ ಪಶುಗಳನ್ನೂ, ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.ಯೆಹೋವನು ಸೌಲನನ್ನು ತಳ್ಳಿಬಿಟ್ಟದ್ದು
10ಯೆಹೋವನು ಸಮುವೇಲನಿಗೆ, <<ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸಲಿಲ್ಲ>> ಎಂದು ಹೇಳಿದನು.11ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವನಿಗೆ ಮೊರೆಯಿಟ್ಟನು.12ಸಮುವೇಲನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವುದಕ್ಕೆ ಹೊರಟಾಗ ಅವನಿಗೆ, <<ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನು>> ಎಂಬ ವರ್ತಮಾನವು ಬಂದದ್ದರಿಂದ13ಸಮುವೇಲನು ಅಲ್ಲಿಗೆ ಹೋದನು. ಸೌಲನು ಅವನನ್ನು ಕಂಡು, << ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು>> ಅಂದನು.14ಅದಕ್ಕೆ ಸಮುವೇಲನು, <<ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತದೆ, ದನಗಳ ಶಬ್ದವು ನನಗೆ ಕೇಳಿಸುತ್ತದೆ>> ಎನ್ನಲು15ಸೌಲನು, <<ಜನರು ನಿನ್ನ ದೇವರಾದ ಯೆಹೋವನಿಗೆ ಯಜ್ಞವನ್ನು ಅರ್ಪಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಉತ್ತಮವಾದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು>> ಎಂದು ಉತ್ತರಕೊಟ್ಟನು.16ಆಗ ಸಮುವೇಲನು ಅವನಿಗೆ, <<ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು>> ಎನ್ನಲು ಅವನು, <<ಹೇಳು>> ಅಂದನು.17ಸಮುವೇಲನು, <<ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು.18ಆತನು ನಿನಗೆ, <ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು> ಎಂದು ಹೇಳಿದನು.19ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?>> ಅಂದನು.20ಆಗ ಸೌಲನು ಸಮುವೇಲನಿಗೆ, <<ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು.21ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞಸಮರ್ಪಣೆಮಾಡುವುದಕ್ಕಾಗಿ ಉಳಿಸಿ ತಂದರು>> ಎಂದು ಉತ್ತರಕೊಟ್ಟನು.22ಅದಕ್ಕೆ ಸಮುವೇಲನು,<< ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ?
ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ;
ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.
23ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು.ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು.
ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ>> ಎಂದು ಹೇಳಿದನು.
24ಸೌಲನು ಸಮುವೇಲನಿಗೆ, <<ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.25ನೀನು ದಯವಿಟ್ಟು ನನ್ನ ಪಾಪವನ್ನು ಕ್ಷಮಿಸು; ನಾನು ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ>> ಎಂದು ಅವನನ್ನು ಬೇಡಿಕೊಂಡನು.26ಅದಕ್ಕೆ ಸಮುವೇಲನು, <<ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಮಾತನ್ನು ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಇಸ್ರಾಯೇಲರ ಅರಸುತನದಿಂದ ನಿವಾರಿಸಿದ್ದಾನೆ>> ಎಂದು ಹೇಳಿ ತಿರುಗಿಕೊಂಡು ಹೊರಡಲು27ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು.28ಆಗ ಸಮುವೇಲನು ಅವನಿಗೆ, <<ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.29 ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ>> ಎಂದು ಹೇಳಿದನು.30ಅದಕ್ಕೆ ಸೌಲನು, <<ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ>> ಎಂದು ಬೇಡಿಕೊಂಡನು.31ಸಮುವೇಲನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು. ಆಗ ಸೌಲನು ದೇವರನ್ನು ಆರಾಧಿಸಿದನು.ಸಮುವೇಲನು ಅಗಾಗನನ್ನು ಸಂಹರಿಸಿದ್ದು
32ತರುವಾಯ ಸಮುವೇಲನು, <<ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ಕರೆತನ್ನಿರಿ>> ಎಂದನು. ಅಗಾಗನು ಮರಣಭಯ ತಪ್ಪಿತೆಂದು ನೆನಪಿಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.33ಆದರೆ ಸಮುವೇಲನು ಅವನಿಗೆ,<<ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ
ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ>>
ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.
34ಅನಂತರ ಸಮುವೇಲನು ರಾಮಕ್ಕೆ ಹೋದನು; ಸೌಲನು ತನ್ನ ಊರಾದ ಗಿಬೆಯದಲ್ಲಿರುವ ಮನೆಗೆ ಹೋದನು.35ಸಮುವೇಲನು ಜೀವದಿಂದ ಇರುವವರೆಗೂ ಸೌಲನನ್ನು ನೋಡಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ವಿಷಾದಪಟ್ಟನು. ಸಮುವೇಲನು ಅವನ ಕುರಿತು ದುಃಖಪಡುತ್ತಿದ್ದನು.
16ದಾವೀದನ ರಾಜ್ಯಾಭಿಷೇಕ
1ಯೆಹೋವನು ಸಮುವೇಲನಿಗೆ, <<ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ>> ಎಂದು ಹೇಳಿದನು.2ಅದಕ್ಕೆ ಸಮುವೇಲನು, <<ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ>> ಎಂದನು. ಅದಕ್ಕೆ ಯೆಹೋವನು, <<ನೀನು ಒಂದು ಕರುವನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವುದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕಾಗಿ ಕರೆ.3ಆ ನಂತರ ನೀನು ಮಾಡಬೇಕಾದದ್ದನ್ನು ನಾನೇ ನಿನಗೆ ತಿಳಿಸುತ್ತೇನೆ. ನಾನು ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ಅಭಿಷೇಕಿಸಬೇಕು>> ಎಂದನು.4ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು <<ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?>> ಎಂದು ಕೇಳಲು5ಅವನು, <<ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ>> ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.6ಅವರು ಬರಲು ಅವನು ಎಲೀಯಾಬನನ್ನು ನೋಡಿ, ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು.7ಆದರೆ ಯೆಹೋವನು ಸಮುವೇಲನಿಗೆ, << ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ>> ಅಂದನು.8ಇಷಯನು ಅಬೀನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, <<ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ>> ಎಂದನು.9ತರುವಾಯ ಇಷಯನು ಶಮ್ಮನನ್ನು ಬರಮಾಡಲು ಸಮುವೇಲನು, <<ಯೆಹೋವನು ಇವನನ್ನೂ ಆರಿಸಿಕೊಳ್ಳಲಿಲ್ಲ>> ಎಂದು ಹೇಳಿದನು.10ಹೀಗೆ ಇಷಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನು ಸಮುವೇಲನ ಬಳಿಗೆ ಬರಮಾಡಿದರೂ ಅವನು, <<ಯೆಹೋವನು ಇವರನ್ನು ಆರಿಸಿಕೊಳ್ಳಲಿಲ್ಲ>> ಎಂದು ನುಡಿದನು.11ಅನಂತರ ಸಮುವೇಲನು ಇಷಯನನ್ನು, <<ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ>> ಎಂದು ಕೇಳಲು ಅವನು, <<ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ>> ಎಂದು ಉತ್ತರಕೊಟ್ಟನು. ಆಗ ಸಮುವೇಲನು, <<ಅವನನ್ನು ಕರೆದುಕೊಂಡು ಬರಲು ತಿಳಿಸು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು>> ಎಂದು ಹೇಳಲು ಇಷಯನು ಅವನನ್ನು ಕರೆದು ಕರೆದುಕೊಂಡು ಬರಲು ತಿಳಿಸಿದನು.12ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, <<ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ>> ಎಂದು ಆಜ್ಞಾಪಿಸಲು13ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.ಸೌಲನ ಆಸ್ಥಾನದಲ್ಲಿ ದಾವೀದನು
14ಯೆಹೋವನ ಆತ್ಮವು ಸೌಲನನ್ನು ಬಿಟ್ಟು ಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದರಿಂದ15ಅವನ ಸೇವಕರು ಅವನಿಗೆ, <<ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಪೀಡಿಸುತ್ತಾ ಇದೆ.16ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿ ನುಡಿಸುವುದರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇನೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಕಿನ್ನರಿ ನುಡಿಸಿದರೆ ನಿನಗೆ ಉಪಶಮನವಾಗುವುದು>> ಎಂದು ಹೇಳಿದರು.17ಸೌಲನು ಅವರಿಗೆ, <<ಚೆನ್ನಾಗಿ ನುಡಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ಹುಡುಕಿ ಕರೆದುಕೊಂಡು ಬನ್ನಿರಿ>> ಎಂದು ಆಜ್ಞಾಪಿಸಿದನು.18ಸೇವಕರಲ್ಲೊಬ್ಬನು ಅವನಿಗೆ, <<ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ>> ಎಂದು ತಿಳಿಸಿದನು.19ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು>> ಎಂದು ಹೇಳಿಸಿದನು.20ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಹೋತಮರಿಯನ್ನೂ, ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.21ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.22ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ>> ಎಂದು ತಿಳಿಸಿದನು.23ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ನುಡಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವುದು; ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.
17ಗೊಲ್ಯಾತನನ್ನು ಇಸ್ರಾಯೇಲರಿಗೆ ಸವಾಲು ಹಾಕಿದ್ದು
1ಫಿಲಿಷ್ಟಿಯರು ಯುದ್ಧ ಮಾಡುವುದಕ್ಕೋಸ್ಕರ ಯೆಹೂದ ದೇಶದ ಸೋಕೋವಿನಲ್ಲಿ ಸೈನ್ಯವನ್ನು ಕೂಡಿಸಿಕೊಂಡು ಬಂದು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮಿನಲ್ಲಿ ಪಾಳೆಯಮಾಡಿಕೊಂಡರು.2ಸೌಲನೂ, ಇಸ್ರಾಯೇಲ್ಯರೂ ಫಿಲಿಷ್ಟಿಯರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸಿ ಏಲಾ ತಗ್ಗಿನಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು.3ಫಿಲಿಷ್ಟಿಯರು ಒಂದು ಗುಡ್ಡದ ಪಕ್ಕದಲ್ಲಿ, ಇಸ್ರಾಯೇಲರು ಇನ್ನೊಂದು ಗುಡ್ಡದ ಪಕ್ಕದಲ್ಲಿಯೂ ನಿಂತರು. ಅವರ ಮಧ್ಯದಲ್ಲಿ ಒಂದು ಕಣಿವೆ ಇತ್ತು.4ಫಿಲಿಷ್ಟಿಯರ ಪಾಳೆಯದಿಂದ ಗತ್ ಊರಿನವನಾದ ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.5ಅವನ ಶಿರಸ್ತ್ರಾಣವು ತಾಮ್ರದ್ದು. ತಾಮ್ರ ಲೋಹದ ಬಿಲ್ಲೆಗಳಿಂದ ಪರೆಪರೆಯಾಗಿ ಜೋಡಿಸಲ್ಪಟ್ಟ ಅವನ ಕವಚವು (ಐದು ಸಾವಿರ ಶೆಕೆಲಿನ ತಾಮ್ರದ ನಾಣ್ಯಗಳಷ್ಟು ತೂಕವಾಗಿತ್ತು.)6ಅವನ ಪಾದರಕ್ಷೆಗಳು, ಹೆಗಲ ಮೇಲಣ ಈಟಿಯೂ ತಾಮ್ರದವು.7ಅವನ ಬರ್ಜಿಯ ಹಿಡಿಕೆಯು ನೇಯಿಗಾರ ಕುಂಟೆಯಷ್ಟು ಗಾತ್ರವಾಗಿತ್ತು. ಅದರ ಅಲಗು ಆರುನೂರು ತೊಲೆ ಕಬ್ಬಿಣದಿಂದ ಮಾಡಿದ್ದು. ಅವನ ಗುರಾಣಿಯನ್ನು ಹೊರುವವನು ಅವನ ಮುಂದೆ ಹೋಗುತ್ತಿದ್ದನು.8ಅವನು ನಿಂತು ಇಸ್ರಾಯೇಲ ಸೈನ್ಯದವರನ್ನು ಕೂಗಿ ಅವರಿಗೆ, <<ನೀವು ಯುದ್ಧಮಾಡಲು ಬಂದದ್ದೇಕೆ? ನಾನು ಫಿಲಿಷ್ಟಿಯನು. ನೀವು ಸೌಲನ ಸೇವಕರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿರಿ.9ಅವನು ನನ್ನೊಡನೆ ಯುದ್ಧಮಾಡಿ ನನ್ನನ್ನು ಕೊಂದರೆ ನಾವು ನಿಮಗೇ ದಾಸರಾಗಿರುವೆವು. ಆದರೆ ನಾನು ಅವನನ್ನು ಸೋಲಿಸಿ ಕೊಂದರೆ ಆಗ ನೀವು ನಮ್ಮ ಗುಲಾಮರಾಗಿ ನಮ್ಮನ್ನು ಸೇವೆಮಾಡುವವರಾಗುವಿರಿ>> ಎಂದು ಹೇಳಿದನು.10ಮತ್ತು ಅವನು, <<ಈಹೊತ್ತು ಇಸ್ರಾಯೇಲ ಸೈನ್ಯದವರನ್ನು ಕುರಿತು. ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ>> ಎಂದು ಸವಾಲು ಹಾಕಿದನು.11ಸೌಲನೂ ಎಲ್ಲಾ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿ ಎದೆಗುಂದಿದವರಾಗಿ ಬಹಳ ಭಯಪಟ್ಟರು.ಯುದ್ಧ ಪಾಳೆಯದಲ್ಲಿ ದಾವೀದನು
12ಸೌಲನ ಕಾಲದಲ್ಲಿ ಯೆಹೂದ ಬೇತ್ಲೆಹೇಮ್ ಎಂಬ ಊರಿನ ಎಫ್ರಾತ್ಯನಾದ ಇಷಯನೆಂಬ ಒಬ್ಬ ವೃದ್ಧನಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನು ಒಬ್ಬನು.13ಇವನ ಮೂರು ಹಿರಿಯ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋಗಿದ್ದರು. ಅವರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬ, ಎರಡನೆಯ ಮಗನ ಹೆಸರು ಅಬೀನಾದಾಬ, ಮೂರನೆಯವನ ಹೆಸರು ಶಮ್ಮ,14ದಾವೀದನೇ ಎಲ್ಲರಿಗಿಂತಲೂ ಕಿರಿಯನು. ಮೂರು ಮಂದಿ ಹಿರಿ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋದ್ದರಿಂದ15ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವುದಕ್ಕೋಸ್ಕರ ಬೇತ್ಲೆಹೇಮಿಗೆ ಹೋದನು.16ಆ ಫಿಲಿಷ್ಟಿಯನು ನಲ್ವತ್ತು ದಿನ ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ, ಬಂದು ಅದೇ ಪ್ರಕಾರ ಕೂಗುತ್ತಾ ಸವಾಲು ಹಾಕುತ್ತಾ ಯುದ್ಧಕ್ಕೆ ನಿಲ್ಲುತ್ತಿದ್ದನು.17ಒಂದು ದಿನ ಇಷಯನು ತನ್ನ ಮಗನಾದ ದಾವೀದನಿಗೆ, <<ಇಗೋ ಇಲ್ಲಿ ಮೂವತ್ತು ಸೇರು ಹುರಿದ ಧಾನ್ಯ, ಹತ್ತು ರೊಟ್ಟಿಗಳೂ ಇರುತ್ತವೆ. ಇವುಗಳನ್ನು ತೆಗೆದುಕೊಂಡು ಶೀಘ್ರವಾಗಿ ಪಾಳೆಯಕ್ಕೆ ಹೋಗಿ ನಿನ್ನ ಅಣ್ಣಂದಿರಿಗೆ ಕೊಡು.18ಇದಲ್ಲದೆ ಇಲ್ಲಿ ಹತ್ತು ಗಿಣ್ಣದ ಉಂಡೆಗಳಿವೆ, ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.19ಸೌಲನೂ, ಇಸ್ರಾಯೇಲರೂ ಏಲಾ ತಗ್ಗಿನಲ್ಲಿ ಫಿಲಿಷ್ಟಿಯರೊಡನೆ ಯುದ್ಧಮಾಡುತ್ತಿದ್ದಾರಲ್ಲಾ>> ಎಂದು ಹೇಳಿದನು.20ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿ ಕಾಯುವವನಿಗೆ ಕುರಿಗಳನ್ನು ಒಪ್ಪಿಸಿ, ತನ್ನ ತಂದೆಯಾದ ಇಷಯನು ಹೇಳಿದವುಗಳನ್ನು ತೆಗೆದುಕೊಂಡು ಸೈನ್ಯವು ಹೊರಟು ಯುದ್ಧಕ್ಕಾಗಿ ಅರ್ಭಟಿಸುವ ಹೊತ್ತಿನಲ್ಲಿ ಪಾಳೆಯದ ರಥಗಳು ನಿಂತಿದ್ದ ಸ್ಥಳಕ್ಕೆ ಬಂದನು.21ಇಸ್ರಾಯೇಲರು, ಫಿಲಿಷ್ಟಿಯರೂ ಎದುರೆದುರು ವ್ಯೂಹಕಟ್ಟುವಷ್ಟರಲ್ಲಿ22ದಾವೀದನು ತಾನು ತಂದವುಗಳನ್ನು ಸಾಮಾನು ಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ ಅವರೊಡನೆ ಮಾತನಾಡುತ್ತಿದ್ದನು.23ಅಷ್ಟರಲ್ಲಿ ಗತ್ ಊರಿನ ಯುದ್ಧವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ತನ್ನ ಸೈನ್ಯದಿಂದ ಹೊರಗೆ ಬಂದು ಮುಂಚಿನಂತೆಯೇ ಕೂಗಿದನು. ದಾವೀದನು ಅವನ ಮಾತುಗಳನ್ನು ಕೇಳಿದನು.24ಇಸ್ರಾಯೇಲರು ಅವನನ್ನು ನೋಡಿ ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.25ಅವರು, <<ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವುದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ? ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು. ಇದಲ್ಲದೆ ಅವನ ತಂದೆಯ ಕುಟುಂಬವನ್ನು ಎಲ್ಲಾ ತೆರಿಗೆಯಿಂದ ವಿಮೋಚಿಸುವನು>> ಎಂದು ಮಾತನಾಡಿಕೊಳ್ಳುತ್ತಿದ್ದರು.26ದಾವೀದನು, << ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ>> ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,27ಅದಕ್ಕೆ ಅವರು ಮುಂಚಿನಂತೆ ಇಂಥಿಂಥದು ದೊರಕುವುದೆಂದು ಉತ್ತರಕೊಟ್ಟರು.28ದಾವೀದನು ಜನರ ಸಂಗಡ ಹೀಗೆ ಮಾತನಾಡುತ್ತಿರುವುದನ್ನು ಅವನ ಹಿರಿಯ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು, <<ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿರುವೆ. ನಿನ್ನ ಸೊಕ್ಕು, ತುಂಟತನವು ನನಗೆ ಗೊತ್ತಿದೆ. ನೀನು ಯುದ್ಧವನ್ನು ನೋಡುವುದಕ್ಕೆ ಬಂದಿದ್ದೀ>> ಎಂದು ಅವನನ್ನು ಗದರಿಸಿದನು.29ಆಗ ದಾವೀದನು, <<ನಾನೇನು ತಪ್ಪು ಮಾಡಿದೆನು? ಸುಮ್ಮನೆ ಮಾತನಾಡಿದೆನಷ್ಟೆ>> ಎಂದು ಹೇಳಿ30ಅವನನ್ನು ಬಿಟ್ಟು ಬೇರೆ ಕಡೆಗೆ ಹೋಗಿ ಹಾಗೆಯೇ ವಿಚಾರಿಸಲು ಜನರು ಮುಂಚಿನಂತೆಯೇ ಉತ್ತರಕೊಟ್ಟರು.31ದಾವೀದನು ಈ ಪ್ರಕಾರ ವಿಚಾರಿಸುತ್ತಿರುವುದನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ದಾವೀದನನ್ನು ಕರೆದುಕೊಂಡು ಬರಲು ಹೇಳಿದನು.32ದಾವೀದನು ಸೌಲನಿಗೆ, <<ಆ ಫಿಲಿಷ್ಟಿಯನ ನಿಮಿತ್ತವಾಗಿ ಯಾವನೂ ಧೈರ್ಯಗೆಡಬಾರದು ನಿನ್ನ ಸೇವಕನಾದ ನಾನು ಹೋಗಿ ಅವನೊಡನೆ ಯುದ್ಧಮಾಡುವೆನು>> ಅನ್ನಲು,33ಸೌಲನು ಅವನಿಗೆ, <<ಅವನೊಡನೆ ಕಾದಾಡಲಾರೆ, ನೀನು ಇನ್ನೂ ಹುಡುಗನು ಅವನಾದರೋ ಚಿಕ್ಕಂದಿನಿಂದಲೇ ಯುದ್ಧವೀರನು>> ಎಂದು ಹೇಳಿದನು.34ಆಗ ದಾವೀದನು ಅವನಿಗೆ, <<ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿರುವಾಗ ಸಿಂಹವಾಗಲಿ, ಕರಡಿಯಾಗಲಿ ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು ಬಂದರೆ35ನಾನು ಒಡನೇ ಬೆನ್ನಟ್ಟಿ, ಅದನ್ನು ಹೊಡೆದು, ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆನು. ಅದು ಹಿಂದಿರುಗಿ ನನ್ನ ಮೇಲೆ ಬೀಳಲು ಬಂದಾಗ ಅದರ ಗದ್ದಹಿಡಿದು ಬಡಿದು ಕೊಂದುಹಾಕುತ್ತಿದ್ದೆನು.36ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.37 ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವನು>> ಎಂದನು. ಆಗ ಸೌಲನು ದಾವೀದನಿಗೆ <<ಹೋಗು ಯೆಹೋವನು ನಿನ್ನ ಸಂಗಡ ಇರಲಿ>> ಎಂದು ಹೇಳಿ,38ಅವನಿಗೆ ತನ್ನ ಯುದ್ಧ ವಸ್ತ್ರಗಳನ್ನು, ಕವಚವನ್ನೂ ತೊಣಿಸಿ, ತಲೆಗೊಂದು ತಾಮ್ರದ ಶಿರಸ್ತ್ರಾಣವನ್ನಿಟ್ಟನು.39ದಾವೀದನು ಯುದ್ಧ ವಸ್ತ್ರದ ಮೇಲೆ ಕತ್ತಿಯನ್ನೂ ಬಿಗಿದುಕೊಂಡ ನಂತರ ನಡೆಯಲು ಸಾಧ್ಯವಾಗುತ್ತದೆಯೇ ಎಂದು ಪರೀಕ್ಷಿಸಿದ ಮೇಲೆ ಸೌಲನಿಗೆ, <<ನನಗೆ ಅಭ್ಯಾಸವಿಲ್ಲದೆ ಇರುವುದರಿಂದ ಇವುಗಳನ್ನು ಧರಿಸಿಕೊಂಡು ನಡೆಯಲಾರೆ>> ಎಂದು ಹೇಳಿ ಅವುಗಳನ್ನು ತೆಗೆದಿಟ್ಟು40ತನ್ನ ಕೋಲನ್ನು ತೆಗೆದುಕೊಂಡು ಹೊರಟು, ಹಳ್ಳದಲ್ಲಿನ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು, ಅವುಗಳನ್ನು ಕುರುಬರ ಪದ್ಧತಿಯಂತೆ ತನಗಿರುವ ಸೊಂಟದ ಚೀಲದಲ್ಲಿ ಹಾಕಿ ಕೈಯಲ್ಲಿ ಕವಣೆಯನ್ನು ಹಿಡಿದು ಫಿಲಿಷ್ಟಿಯನ ಬಳಿಗೆ ಹೋದನು.ದಾವೀದನು ಗೊಲ್ಯಾತನನ್ನು ಕೊಂದುಹಾಕಿದು
41ಇತ್ತ ಫಿಲಿಷ್ಟಿಯನೂ ದಾವೀದನ ಸಮೀಪಕ್ಕೆ ಬಂದನು. ಗುರಾಣಿ ಹೊರುವವರು ಅವನ ಮುಂದೆ ಇದ್ದರು.42ಫಿಲಿಷ್ಟಿಯನು ಕೆಂಬಣ್ಣದವನೂ, ಸುಂದರನೂ, ಯೌವನಸ್ಥನೂ ಆದ ದಾವೀದನನ್ನು ನೋಡಿ ತಿರಸ್ಕಾರದಿಂದ ಅವನಿಗೆ,43<<ನೀನು ಕೋಲುಹಿಡಿದು ನನ್ನ ಬಳಿಗೆ ಬರುವುದೇನು? ನಾನು ನಾಯಿಯೋ>> ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿ,44<<ಇಲ್ಲಿ ಬಾ, ನಿನ್ನ ಮಾಂಸವನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುತ್ತೇನೆ>> ಅಂದನು.45ಆಗ ದಾವೀದನು ಅವನಿಗೆ, <<ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ.46ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲರೊಳಗೆ ದೇವರಿದ್ದಾನೆಂಬುದು ಭೂಲೋಕದವರಿಗೆಲ್ಲಾ ತಿಳಿದುಬರುವುದು.47 ಯೆಹೋವನು ಈಟಿಕತ್ತಿಗಳಿಲ್ಲದೇ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರಿಗೆಲ್ಲಾ ತಿಳಿದುಬರುವುದು. ಯಾಕೆಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ. ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು>> ಅಂದನು.48ಕೂಡಲೇ ಆ ಫಿಲಿಷ್ಟಿಯನು ಹೊರಟು ದಾವೀದನೊಡನೆ ಯುದ್ಧಮಾಡುವುದಕ್ಕೆ ಸಮೀಪಿಸಿದಾಗ ದಾವೀದನು ಫಿಲಿಷ್ಟಿಯರ ಸೈನ್ಯದ ಕಡೆಗೆ ಓಡಿಹೋಗಿ ಆ ಫಿಲಿಷ್ಟಿಯನನ್ನು ಸಂಧಿಸಿ,49ಚೀಲದಲ್ಲಿ ಕೈ ಹಾಕಿ, ಒಂದು ಕಲ್ಲನ್ನು ತೆಗೆದು ಅವನ ಹಣೆಗೆ ಗುರಿಯಿಟ್ಟು ಕವಣೆಯನ್ನು ಬೀಸಿ ಹೊಡೆಯಲು ಕಲ್ಲು ಅವನ ಹಣೆಯೊಳಗೆ ಹೊಕ್ಕಿತು. ಅವನು ಬೋರಲುಬಿದ್ದನು50ಕೂಡಲೇ ಅವನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ತೆಗೆದುಕೊಂಡು, ಅದರಿಂದಲೇ ಅವನ ತಲೆಯನ್ನು ಕತ್ತರಿಸಿ, ಅವನನ್ನು ಸಾಯಿಸಿದನು.51ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ, ಕೊಂದು ಹಾಕಿದನು ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.52ಇಸ್ರಾಯೇಲರು ಯೆಹೂದ್ಯರು ಎದ್ದು ಆರ್ಭಟಿಸಿ ಫಿಲಿಷ್ಟಿಯರನ್ನು ತಗ್ಗಿನ ದಾರಿಯವರೆಗೂ ಎಕ್ರೋನಿನ ಬಾಗಿಲುಗಳವರೆಗೂ ಹಿಂದಟ್ಟಿದರು. ಫಿಲಿಷ್ಟಿಯರ ಹೆಣಗಳು ಶಾರಯಿಮಿನಿಂದ ಗತ್ ಎಕ್ರೋನ್ ಪಟ್ಟಣಗಳವರೆಗೂ ಬಿದ್ದಿದ್ದವು.53ಅನಂತರ ಇಸ್ರಾಯೇಲರು ಹಿಂತಿರುಗಿ ಬಂದು ಫಿಲಿಷ್ಟಿಯರ ಪಾಳೆಯವನ್ನು ಸೂರೆಮಾಡಿದರು.54ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಯೆರೂಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು.ಸೌಲ ದಾವೀದರ ಪರಿಚಯ.
55ದಾವೀದನು ಫಿಲಿಷ್ಟಿಯರೊಡನೆ ಯುದ್ಧಮಾಡುವುದಕ್ಕೆ ಹೊರಟದ್ದನ್ನು ಸೌಲನು ಕಂಡು ತನ್ನ ಸೇನಾಪತಿಯಾದ ಅಬ್ನೇರನನ್ನು, <<ಅಬ್ನೇರನೇ ಈ ಹುಡುಗನು ಯಾರ ಮಗನು?>> ಎಂದು ಕೇಳಿದ್ದಕ್ಕೆ ಅವನು ಸೌಲನಿಗೆ, <<ಅರಸನೇ ನಿನ್ನ ಜೀವದಾಣೆ ನನಗೆ ಗೊತ್ತಿಲ್ಲ>> ಎಂದು ಉತ್ತರಕೊಟ್ಟನು.56ಆಗ ಅರಸನು ಅವನಿಗೆ, <<ಆ ಪ್ರಾಯಸ್ಥನು ಯಾರ ಮಗನೆಂದು ವಿಚಾರಿಸು>> ಎಂದು ಆಜ್ಞಾಪಿಸಿದನು.57ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ಹಿಡಿದುಕೊಂಡು ಹಿಂದಿರುಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು.58ಸೌಲನು ಅವನನ್ನು, <<ಹುಡುಗನೇ ನೀನು ಯಾರ ಮಗನು?>> ಎಂದು ಕೇಳಿದ್ದಕ್ಕೆ ಅವನು, <<ನಾನು ಬೇತ್ಲೆಹೇಮಿನವನೂ ನಿನ್ನ ಸೇವಕನೂ ಆದ ಇಷಯನ ಮಗನು>> ಎಂದು ಉತ್ತರಕೊಟ್ಟನು.
18ದಾವೀದ ಯೋನಾತಾನರ ಗೆಳೆತನ
1ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.2ಆ ದಿನದಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಗೊಡದೇ, ತನ್ನ ಬಳಿಯಲ್ಲೇ ಇಟ್ಟುಕೊಂಡನು.3ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು.4ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನು ತನ್ನ ಯುದ್ಧವಸ್ತ್ರಗಳನ್ನು, ಕತ್ತಿ, ಬಿಲ್ಲು, ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.5ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡೆಸುತ್ತಿದ್ದನು. ಸೌಲನು ಇವನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇದು ಅವನ ಸೇವಕರಿಗೂ, ಎಲ್ಲಾ ಜನರಿಗೂ ಮೆಚ್ಚಿಗೆಯಾಯಿತು.ಸೌಲನು ದಾವೀದನನ್ನು ದ್ವೇಷಿಸಿದ್ದು
6ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ, ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರೂ ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸನಾದ ಸೌಲನನ್ನು ಎದುರುಗೊಂಡರು.7ಅವರು ಹಾಡುತ್ತಾ, ಕೊಂಡಾಡುತ್ತಾ,<<ಸೌಲನು ಸಾವಿರ ಶತ್ರುಗಳನ್ನು ಕೊಂದನು.
ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು>> ಎಂದು ಹಾಡಿದರು.
8ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು <<ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು>> ಅಂದುಕೊಂಡು9ಅಂದಿನಿಂದ ಅವನು ದಾವೀದನನ್ನು ಸಂಶಯದಿಂದ ನೋಡುತ್ತಿದ್ದನು.10ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು.11ಆಗ ಸೌಲನು ದಾವೀದನನ್ನು ಗೋಡೆಗೆ ಸೇರಿಕೊಳ್ಳುವ ಹಾಗೆ ತಿವಿಯುವೆನು ಎಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.12ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದುದರಿಂದ ಸೌಲನು ದಾವೀದನಿಗೆ ಭಯಪಟ್ಟು,13ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ, ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ಹೀಗೆ ದಾವೀದನು ಜನರ ಸಂಗಡ ಹೋಗುತ್ತಾ ಬರುತ್ತಾ ಇದ್ದನು.14ಯೆಹೋವನು ಅವನ ಸಂಗಡ ಇದ್ದದರಿಂದ ದಾವೀದನು ಎಲ್ಲಾ ಕಾರ್ಯಗಳನ್ನು ವಿವೇಕದಿಂದ ನಡೆಸುತ್ತಿದ್ದನು.15ಇದನ್ನು ನೋಡಿ ಸೌಲನು ದಾವೀದನಿಗೆ ಬಹಳವಾಗಿ ಹೆದರಿಕೊಂಡನು.16ಆದರೆ ಇಸ್ರಾಯೇಲರೂ, ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.ದಾವೀದನು ಸೌಲನ ಅಳಿಯನಾದದ್ದು
17ಒಂದು ದಿನ ಸೌಲನು, ಇವನು ನನ್ನ ಕೈಯಿಂದಲ್ಲ ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ, <<ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು. ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ>> ಅಂದನು.18ಅದಕ್ಕೆ ದಾವೀದನು <<ಅರಸನ ಅಳಿಯನಾಗುವುದಕ್ಕೆ ನಾನು ಎಷ್ಟರವನು? ಇಸ್ರಾಯೇಲರಲ್ಲಿ ನನ್ನ ತಂದೆಯ ಕುಟುಂಬವೂ ಸಮಾನವೇ?>> ಎಂದನು.19ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಕೊಡತಕ್ಕ ಕಾಲ ಬಂದಾಗ ಅವನು ಅವಳನ್ನು ಮೆಹೋಲದ ಅದ್ರೀಯೇಲ ಎಂಬವನಿಗೆ ಮದುವೆಮಾಡಿ ಕೊಟ್ಟನು.20ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಇದು ಸೌಲನಿಗೆ ತಿಳಿದಾಗ ಅವನಿಗೆ ಸಂತೋಷವಾಯಿತು.21ಅವಳು ದಾವೀದನಿಗೆ ಉರಲಾಗಿರುವಂತೆಯೂ, ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ, <<ನೀನು ನನ್ನ ಅಳಿಯನಾಗುವುದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು>> ಎಂದು ಹೇಳಿದನು.22ಅವನು ತನ್ನ ಸೇವಕರಿಗೆ, <<ನೀವು ದಾವೀದನಿಗೆ ಗುಪ್ತವಾಗಿ, <ಅರಸನಿಗೆ ನಿನ್ನನ್ನು ಒಲಿಯುತ್ತಾನೆ, ಅವನ ಸೇವಕರು ನಿನ್ನನ್ನು ಪ್ರೀತಿಸುತ್ತಾರೆ. ನೀನು ಅರಸನ ಅಳಿಯನಾಗು> ಎಂದು ಹೇಳಿರಿ>> ಅಂದನು.23ಆ ಸೇವಕರು ದಾವೀದನಿಗೆ ಹಾಗೆಯೇ ಹೇಳಿದಾಗ ಅವನು, << ಅರಸನ ಅಳಿಯನಾಗುವುದು ಸಾಧಾರಣವಾದ ಸಂಗತಿಯೆಂದು ನೆನಸುತ್ತೀರೋ? ನಾನು ದರಿದ್ರನೂ, ಅಲ್ಪನೂ ಆಗಿರುತ್ತೆನಲ್ಲಾ>> ಎಂದು ಉತ್ತರ ಕೊಟ್ಟನು.24ಸೇವಕರು ದಾವೀದನ ಮಾತುಗಳನ್ನು ಸೌಲನಿಗೆ ತಿಳಿಸಿದರು.25ಆಗ ಅವನು ಅವರಿಗೆ, <<ನೀವು ಹೋಗಿ ದಾವೀದನಿಗೆ, <ಅರಸನು ತೆರವನ್ನು ಅಪೇಕ್ಷಿಸುವುದಿಲ್ಲ. ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆ> ಎಂದು ಹೇಳಿರಿ>> ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬುದೇ ಅವನ ಉದ್ದೇಶವಾಗಿತ್ತು.26ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅವನು ಅರಸನ ಅಳಿಯನಾಗುವುದಕ್ಕೆ ಒಪ್ಪಿದನು. ನೇಮಕವಾದ ದಿನಗಳು ಮುಗಿಯುವ ಮೊದಲೇ,27ದಾವೀದನು ತನ್ನ ಸೇವಕರೊಡನೆ ಹೊರಟು, ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ ಇನ್ನೂರು ಜನರನ್ನು ಕೊಂದು, ಮುಂದೊಗಲುಗಳನ್ನು ತಂದು, ಅರಸನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು.28 ಮೀಕಲಳು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು,29ಸೌಲನು ತಿಳಿದು ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.30 ಫಿಲಿಷ್ಟಿಯ ಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಧಿಪತಿಗಳಲ್ಲಿ ದಾವೀದನೇ ಹೆಚ್ಚು ಪ್ರಭಾವಶಾಲಿಯಾಗಿ ಬರುತ್ತಿದ್ದುದರಿಂದ ಅವನ ಹೆಸರು ಬಹು ಸುಪ್ರಸಿದ್ಧವಾಯಿತು.
19ಸೌಲನು ದಾವೀದನನ್ನು ಕೊಲ್ಲಲು ಪ್ರಯತ್ನಿಸಿದ್ದು
1ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ, ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.2ಆದ್ದರಿಂದ ಅವನು ದಾವೀದನಿಗೆ, <<ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು. ನಾಳೆ ಬೆಳಿಗ್ಗೆ ಒಂದು ಗುಪ್ತವಾದ ಸ್ಥಳದಲ್ಲಿ ಅಡಗಿಕೊಂಡಿರು.3ನೀನು ಅಡಗಿಕೊಂಡಿರುವ ಹೊಲಕ್ಕೆ ನಾನು ಬಂದು, ನನ್ನ ತಂದೆಯ ಬಳಿಯಲ್ಲಿ ನಿಂತು, ನಿನ್ನ ವಿಷಯವನ್ನು ಮಾತನಾಡಿ, ಅವನಿಂದ ತಿಳಿದು ಬರುವ ವಿಚಾರವನ್ನು ನಿನಗೆ ತಿಳಿಸುವೆನು>> ಎಂದು ಹೇಳಿದನು.4ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ, <<ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯ ಮಾಡದಿರಲಿ. ಅವನು ನಿನಗೆ ದ್ರೋಹ ಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.5 ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?>> ಅಂದನು.6ಸೌಲನು ಯೋನಾತಾನನ ಮಾತುಗಳನ್ನು ಲಾಲಿಸಿ, << ಯೆಹೋವನಾಣೆ, ಅವನನ್ನು ಕೊಲ್ಲುವುದಿಲ್ಲ>> ಎಂದು ಪ್ರಮಾಣಮಾಡಿದನು.7ಆಗ ಯೋನಾತಾನನು ದಾವೀದನನ್ನು ಕರೆದು, ಅವನಿಗೆ ಈ ಮಾತುಗಳನ್ನು ತಿಳಿಸಿ, ಸೌಲನ ಬಳಿಗೆ ಕರೆದುಕೊಂಡು ಬಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.8ಫಿಲಿಷ್ಟಿಯರು ತಿರುಗಿ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಸಂಪೂರ್ಣವಾಗಿ ಸೋಲಿಸಿ, ಓಡಿಸಿಬಿಟ್ಟನು.9ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು.10ಅವನು ಒಡನೆ ಕಿನ್ನರಿಯನ್ನು ನುಡಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಪಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ, ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.11ಸೌಲನು ಕೂಡಲೇ ದೂತರನ್ನು ಕರಿಸಿ ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, <<ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ>> ಎಂದು ಹೇಳಿ12 ಅವನನ್ನು ಕಿಟಕಿಯಿಂದ ಕೆಳಕ್ಕಿಳಿಸಲು ಅವನು ಓಡಿಹೋಗಿ ತಪ್ಪಿಸಿಕೊಂಡನು.13ಅನಂತರ ಆಕೆಯು ಮನೆಯಲ್ಲಿದ್ದ ಒಂದು ವಿಗ್ರಹವನ್ನು ತಂದು, ಹಾಸಿಗೆಯ ಮೇಲೆ ಮಲಗಿಸಿ, ಅದರ ಮುಖದ ಮೇಲೆ ಮೇಕೆಕೂದಲಿನಿಂದ ಹೆಣೆದ ಜಾಲರಿಯನ್ನು ತಲೆದಿಂಬಿನ ಜಾಗದಲ್ಲಿ ಹಾಕಿ ಕಂಬಳಿಯನ್ನು ಹೊದಿಸಿದಳು.14ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು ಅವನಿಗೆ ಸ್ವಸ್ಥವಿಲ್ಲವೆಂದು ಹೇಳಿಕಳುಹಿಸಿದಳು.15ಸೌಲನು ತಿರುಗಿ ತನ್ನ ಆಳುಗಳನ್ನು, <<ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದುಹಾಕುತ್ತೇನೆ>> ಎಂದು ಆಜ್ಞಾಪಿಸಿದನು.16ಅವರು ಹೋಗಿ ನೋಡಲು ಹಾಸಿಗೆಯ ಮೇಲಿರುವುದು ಮೇಕೆಕೂದಲಿನಿಂದ ಹೆಣೆದ ಜಾಲರಿಯ ಒಂದು ವಿಗ್ರಹ ಎಂದು ತಿಳಿದುಬಂತು.17ಆಗ ಸೌಲನು ಮೀಕಲಳಿಗೆ, <<ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ>> ಎನ್ನಲು ಆಕೆಯು ಅವನಿಗೆ, <<ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ ಎಂದು ಅವನು ನನಗೆ ಹೇಳಿದನು>> ಅಂದಳು.ದಾವೀದನು ಸಮುವೇಲನ ಬಳಿಗೆ ಬಂದದ್ದು
18ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ನಯೋತ್ ಎಂಬ ಸ್ಥಳದಲ್ಲಿ ವಾಸವಾಗಿದ್ದರು.19ದಾವೀದನು ರಾಮದ ನಯೋತಿನಲ್ಲಿರುವುದು ಸೌಲನಿಗೆ ಗೊತ್ತಾಗಲು,20ಅವನು ದಾವೀದನನ್ನು ಹಿಡಿದು ತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪ್ರವಾದಿಸುತ್ತಿರುವುದನ್ನೂ, ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನು ಕಂಡಾಗ, ದೇವರ ಆತ್ಮವು ಅವರ ಮೇಲೆಯೂ ಬಂದಿತು. ಅವರೂ ಪ್ರವಾದಿಸಿದರು.21ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪ್ರವಾದಿಸಿದರು. ಅವನು ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಅವರೂ ಪ್ರವಾದಿಸಿದರು.22ಆಗ ಸೌಲನು ತಾನೇ ರಾಮಕ್ಕೆ ಹೋಗಬೇಕೆಂದು ಹೊರಟು, ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, <<ಸಮುವೇಲ ದಾವೀದರು ಎಲ್ಲಿರುತ್ತಾರೆ?>> ಎಂದು ವಿಚಾರಿಸಿದನು. ಆಗ ಜನರು, <<ರಾಮದ ನಯೋತಿನಲ್ಲಿ ಇರುತ್ತಾರೆ>> ಎಂದು ಉತ್ತರಕೊಟ್ಟರು.23ಅವನು ಅಲ್ಲಿಂದ ರಾಮದ ನಯೋತಿಗೆ ಹೋಗುವಾಗ ದೇವರ ಆತ್ಮವು ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವ ತನಕ ಪ್ರವಾದಿಸುತ್ತಾ ಹೋದನು.24ಅಲ್ಲಿಗೆ ಸೇರಿದ ಮೇಲೆ ಅವನು ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪ್ರವಾದಿಸುತ್ತಾ, ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಇದರಿಂದ <<ಸೌಲನೂ ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ>> ಎಂಬ ಮಾತು ಪ್ರಚಲಿತವಾಯಿತು.
20ದಾವೀದ ಯೋನಾತಾನರ ಒಡಂಬಡಿಕೆ
1ದಾವೀದನು ರಾಮದ ನಯೋತಿನಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ, <<ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ, ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವುದು?>> ಎನ್ನಲು,2ಯೋನಾತಾನನು ಅವನಿಗೆ, <<ಇದು ಆಗಲೇಬಾರದು, ನಿನಗೆ ಮರಣವಾಗಕೂಡದು. ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ, ಮಹಾಕಾರ್ಯವನ್ನಾಗಲಿ ನನಗೆ ತಿಳಿಸದೇ ಮಾಡುವುದಿಲ್ಲ. ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಲು ಸಾಧ್ಯ?>> ಎಂದು ಹೇಳಿದನು.3ಅದಕ್ಕೆ ದಾವೀದನು, <<ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ>> ಎಂದು ಖಂಡಿತವಾಗಿ ಹೇಳಿದನು.4ಆಗ ಯೋನಾತಾನನು ದಾವೀದನಿಗೆ, <<ನಾನು ನಿನಗೋಸ್ಕರ ಮಾಡಬೇಕಾದದ್ದನ್ನು ಹೇಳು ಮಾಡುತ್ತೇನೆ>> ಅಂದನು.5 ಅದಕ್ಕೆ ದಾವೀದನು, <<ನಾಳೆ ಅಮಾವಾಸ್ಯೆ. ನಾನು ಅರಸನ ಪಂಕ್ತಿಯಲ್ಲಿ ಊಟಮಾಡಬೇಕಾಗಿರುವುದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.6ನಿನ್ನ ತಂದೆಯು ನನ್ನನ್ನು ಕುರಿತು ವಿಚಾರ ಮಾಡಿದರೆ, ನೀನು, <ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಅವನ ಗೋತ್ರದವರು ಅಲ್ಲಿ ವಾರ್ಷಿಕ ಯಜ್ಞಮಾಡುತ್ತಾರೆ> ಎಂದು ಹೇಳು.7ಅವನು ಆಗಲಿ ಅಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು. ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ, ಸೇವಕನ ಮೇಲೆ ದಯೆಯಿರಲಿ.8ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ, ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವುದೇಕೆ? ನೀನೇ ನನ್ನನ್ನು ಕೊಂದುಹಾಕು>> ಎಂದು ಹೇಳಿದನು.9ಯೋನಾತಾನನು ಅವನಿಗೆ, <<ಇದು ಆಗಲೇ ಬಾರದು, ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ತಿಳಿಸದಿರುತ್ತೇನೆಯೇ?>> ಅಂದನು.10ದಾವೀದನು, <<ನಿನ್ನ ತಂದೆಯು ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ?>> ಎಂದು ಅವನನ್ನು ಕೇಳಲು11ಯೋನಾತಾನನು ಅವನಿಗೆ, <<ನಾವು ಹೊಲಕ್ಕೆ ಹೋಗೋಣ ಬಾ>> ಎಂದು ಹೇಳಿದನು.12ಅವರಿಬ್ಬರೂ ಹೊಲಕ್ಕೆ ಹೋದ ಮೇಲೆ ಯೋನಾತಾನನು ದಾವೀದನಿಗೆ, <<ಇಸ್ರಾಯೇಲರ ದೇವರಾದ ಯೆಹೋವನೇ ಸಾಕ್ಷಿ, ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತನಾಡಿ, ನಿನ್ನ ಮೇಲೆ ಅವನಿಗೆ ದಯೆ ಉಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಸುವೆನು.13ನನ್ನ ತಂದೆಯು ನಿನಗೆ ಕೇಡುಮಾಡುವ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ, ನೀನು ತಪ್ಪಿಸಿಕೊಂಡು ಸುರಕ್ಷಿತವಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ, ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.14ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು.15 ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾದ ನಿನ್ನ ದಯೆಯಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂಮಿಯಿಂದ ತೆಗೆದು ಹಾಕಿದರೂ ಅದು ನನ್ನ ಮನೆಯಿಂದ ಅಗಲದಿರಲಿ.16ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ>> ಎಂದು ಹೇಳಿ ಅವರ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು,17ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದುದರಿಂದ ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು.18ಯೋನಾತಾನನು ದಾವೀದನಿಗೆ, <<ನಾಳೆ ಅಮಾವಾಸ್ಯೆ, ನಿನ್ನ ಸ್ಥಳವು ಬರಿದಾಗಿರುವುದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು.19ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು.20ನಾನು ಗುರಿಯಿಟ್ಟವನೋ ಎಂಬಂತೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆದು ಕೂಡಲೇ ಅವುಗಳನ್ನು21ತರುವುದಕ್ಕಾಗಿ ನನ್ನ ಆಳುಗಳನ್ನು ಕಳುಹಿಸುವೆನು. ನಾನು ಅವನಿಗೆ, <ಬಾಣಗಳು ಈಚೆ ಬಿದ್ದಿರುತ್ತವೆ ಅವುಗಳನ್ನು ತೆಗೆದುಕೊಂಡು ಬಾ> ಎಂದು ಹೇಳಿದರೆ ನೀನು ಬಾ ಯೆಹೋವನ ಆಣೆ ಯಾವ ಕೇಡು ಸಂಭವಿಸದೆ ಸುರಕ್ಷಿತನಾಗಿರುವಿ.22ಆದರೆ, <ಬಾಣಗಳು ಆಚೆ ಬಿದ್ದಿರುತ್ತವೆ> ಎಂದು ಹೇಳಿದರೆ ಹೊರಟುಹೋಗು, ನೀನು ಹೋಗುವುದೇ ಯೆಹೋವನ ಚಿತ್ತವಾಗಿದೆ.23ನಮ್ಮಿಬ್ಬರ ಒಡಂಬಡಿಕೆಗೆ ಯೆಹೋವನೇ ನಿತ್ಯ ಸಾಕ್ಷಿಯಾಗಿರುವನು>> ಅಂದನು.24ದಾವೀದನು ಹೊಲದಲ್ಲಿ ಅಡಗಿಕೊಂಡನು.25ಅರಸನು ಅಮಾವಾಸ್ಯೆ ದಿನ, ಪದ್ದತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅರಸನ ಎದುರಾಗಿ ಯೋನಾತಾನನೂ, ಅರಸನ ಪಕ್ಕದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳವು ಬರಿದಾಗಿರುವುದನ್ನು ಕಂಡರೂ,26ಆ ದಿನ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು. ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನು ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.27ಮರುದಿನದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿನದಲ್ಲಿಯೂ ದಾವೀದನ ಸ್ಥಾನ ಬರಿದಾಗಿದ್ದರಿಂದ ಸೌಲನು, <<ಇಷಯನ ಮಗನು ನಿನ್ನೆಯೂ, ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ?>> ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು.28ಅದಕ್ಕೆ ಯೋನಾತಾನನು, <<ದಾವೀದನು <ಬೇತ್ಲೆಹೇಮಿನಲ್ಲಿ ನಮ್ಮ ಗೋತ್ರದವರು ಯಜ್ಞಮಾಡುತ್ತಾರೆ29ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ. ದಯವಿಟ್ಟು ನನಗೆ ಅಪ್ಪಣೆಕೊಡು ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿ ಬರುತ್ತೇನೆ> ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದ್ದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ>> ಎಂದು ಉತ್ತರಕೊಟ್ಟನು.30ಆಗ ಸೌಲನು ಬಹಳವಾಗಿ ಕೋಪಗೊಂಡು ಯೋನಾತಾನನಿಗೆ, <<ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು.31ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ, ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ. ಆದುದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ. ಅವನು ಸಾಯಬೇಕು>> ಅಂದನು.32ಅದಕ್ಕೆ ಯೋನಾತಾನನು, <<ಅವನು ಯಾಕೆ ಸಾಯಬೇಕು? ಅವನು ಏನು ಮಾಡಿದನು?>> ಎಂದು ತನ್ನ ತಂದೆಯನ್ನು ಕೇಳಿದನು.33ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನಾನಿಗೆ ಗೊತ್ತಾಗಲು34ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿನ ಊಟಮಾಡಲೇ ಇಲ್ಲ.35ಅವನು ಮರುದಿನ ಬೆಳಿಗ್ಗೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಹೊಲಕ್ಕೆ ಹೋಗಿ,36ಹುಡುಗನಿಗೆ, <<ಬೇಗ ಹೋಗಿ ನಾನು ಎಸೆದ ಬಾಣಗಳನ್ನು ಕೂಡಿಸಿಕೊಂಡು ಬಾ>> ಎಂದು ಹೇಳಿದನು. ಆ ಹುಡುಗನು ಹೋಗುತ್ತಿರುವಾಗ ಯೋನಾತಾನನು ಬಾಣವನ್ನು ಅವನ ಆಚೆಗೆ ಎಸೆದನು.37ಹುಡುಗನು ಬಾಣ ಬಿದ್ದ ಸ್ಥಳಕ್ಕೆ ಬಂದಾಗ ಯೋನಾತಾನನು ಅವನಿಗೆ, <<ಬಾಣವು ನಿನ್ನ ಆಚೆ ಬಿದ್ದಿತಲ್ಲಾ38ಬೇಗ ಹೋಗು ನಿಲ್ಲಬೇಡ>> ಎಂದು ಕೂಗಿ ಹೇಳಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು.39ಇದರ ರಹಸ್ಯವು ಯೋನಾತಾನ ದಾವೀದರಿಗೆ ತಿಳಿದಿತ್ತೇ ಹೊರತು ಆ ಹುಡುಗನಿಗೆ ಗೊತ್ತಿರಲಿಲ್ಲ.40ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು ಅವನಿಗೆ, <<ಅವುಗಳನ್ನು ಊರಿಗೆ ತೆಗೆದುಕೊಂಡು ಹೋಗು>> ಎಂದು ಹೇಳಿದನು.41ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.42ಅನಂತರ ಯೋನಾತಾನನು ದಾವೀದನಿಗೆ, <<ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ>> ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.
21ದಾವೀದನು ನೋಬಕ್ಕೆ ಹೋದದ್ದು
1ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು, <<ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ, ನೀನು ಒಬ್ಬನೇ ಬಂದದ್ದೇಕೆ?>> ಎಂದು ಅವನನ್ನು ಕೇಳಿದನು.2ಅವನು, <<ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ, ಇದನ್ನು ಯಾರಿಗೂ ತಿಳಿಸಬಾರದೆಂದು ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದಾನೆ.3ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ನಾಲ್ಕೈದು ರೊಟ್ಟಿಗಳಾದರೂ, ಬೇರೆ ಯಾವ ಆಹಾರಪದಾರ್ಥವಾದರೂ ಇದ್ದರೆ ನನಗೆ ಕೊಟ್ಟುಬಿಡು>> ಎಂದನು.4ಯಾಜಕನು ದಾವೀದನಿಗೆ, <<ನನ್ನ ಬಳಿಯಲ್ಲಿ ಮೀಸಲು ರೊಟ್ಟಿಗಳು ಹೊರತು ಬೇರೆ ರೊಟ್ಟಿಗಳಿಲ್ಲ. ನಿನ್ನ ಆಳುಗಳು ಸ್ತ್ರೀಸಂಗ ಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು>> ಎಂದನು.5ದಾವೀದನು, <<ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗವನ್ನು ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳು, ಸಾಮಾನುಗಳು ಪರಿಶುದ್ಧವಾಗಿರುತ್ತವೆ. ಈ ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುತ್ತದಲ್ಲವೇ>> ಎಂದು ಉತ್ತರ ಕೊಟ್ಟನು6 ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನಗಳಲ್ಲಿ ಯೆಹೋವನ ಸನ್ನಿಧಿಯಿಂದ ತೆಗೆಯಲ್ಪಟ್ಟ ನೈವೇದ್ಯವಾದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳು ಇರಲಿಲ್ಲವಾದ್ದರಿಂದ, ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.7ಅದೇ ದಿನ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ಉಳಿದುಕೊಂಡಿದ್ದನು.8ದಾವೀದನು ಅಹೀಮೆಲೆಕನನ್ನು, <<ಅರಸನ ಕಾರ್ಯವು ತುರ್ತಾದ್ದರಿಂದ ಕತ್ತಿಯನ್ನಾಗಲಿ, ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲಿಲ್ಲ, ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ?>> ಎಂದು ಕೇಳಿದನು.9ಅವನು, <<ನೀನು ಏಲಾ ತಗ್ಗಿನಲ್ಲಿ ಕೊಂದು ಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು, ಏಫೋದಿನ ಹಿಂದೆ ಇಡಲ್ಪಟ್ಟಿದೆ. ಬೇಕಾದರೆ ಅದನ್ನು ತೆಗೆದುಕೊ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ>> ಎಂದು ಉತ್ತರಕೊಟ್ಟನು. ದಾವೀದನು, <<ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ. ಅದನ್ನೇ ಕೊಡು>> ಎಂದು ಹೇಳಿ ತೆಗೆದುಕೊಂಡನು.ದಾವೀದನು ಗತ್ ಊರಿಗೆ ಓಡಿಹೋದದ್ದು
10ದಾವೀದನನು ಸೌಲನ ಭಯದಿಂದ ಅದೇ ದಿನ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.11ಆಕೀಷನ ಸೇವಕರು, <<ಸೌಲನು ಸಾವಿರಾರು ಶತ್ರುಗಳನ್ನು ಕೊಂದನು, ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು ಎಂಬುದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನ ಕುರಿತಲ್ಲವೋ?>> ಎಂದು ಮಾತನಾಡಿಕೊಂಡರು.12ದಾವೀದನು ಈ ಮಾತುಗಳನ್ನು ಕೇಳುತ್ತಲೇ ಗತ್ ಊರಿನ ಅರಸನಾದ ಆಕೀಷನಿಗೆ ಬಹಳವಾಗಿ ಹೆದರಿ,13ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಬಾಗಿಲುಗಳನ್ನು ಕೆರೆಯುತ್ತಾ, ತನ್ನನ್ನು ಹುಚ್ಚನಂತೆ ನಟಿಸಿದನು.14ಆಗ ಆಕೀಷನು ತನ್ನ ಸೇವಕರಿಗೆ, <<ಈ ಮನುಷ್ಯನು ಹುಚ್ಚನೆಂದು ನಿಮಗೆ ಕಾಣುವುದಿಲ್ಲವೋ, ಇವನನ್ನು ನನ್ನ ಹತ್ತಿರ ಯಾಕೆ ಕರೆತಂದಿರಿ?15ನನ್ನ ಬಳಿಯಲ್ಲಿ ಹುಚ್ಚರು ಕಡಿಮೆಯೆಂದು ನೆನಸಿ ನನ್ನನ್ನು ಬೇಸರಗೊಳಿಸುವುದಕ್ಕಾಗಿ ಇವನನ್ನು ಕರೆತಂದಿರೋ? ಇಂಥವನೂ ನನ್ನ ಮನೆಗೆ ಬರಬೇಕೋ?>> ಅಂದನು.
22ದಾವೀದನು ಅದುಲ್ಲಾಮ್ ಗವಿಗೆ ಹೋದದ್ದು
1ದಾವೀದನು ಅಕೀಷ ರಾಜನಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ, ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ, ಅವರೂ ಬಂದು ಅವನನ್ನು ಸೇರಿಕೊಂಡರು.2ಇದಲ್ಲದೆ ಕುಗ್ಗಿದವರೂ, ಸಾಲಗಾರರೂ, ಮನನೊಂದವರೂ, ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು, ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.3ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋಗಿ ಅಲ್ಲಿಯ ಅರಸನಿಗೆ, <<ದೇವರು ನನಗೆ ಮಾರ್ಗತೋರಿಸುವವರೆಗೆ ನನ್ನ ತಂದೆತಾಯಿಗಳು ನಿನ್ನ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು>> ಎಂದು ಬೇಡಿಕೊಂಡು, ಅವರನ್ನು ಅವನ ಬಳಿಯಲ್ಲಿ ಬಿಟ್ಟನು.4ದಾವೀದನು ದುರ್ಗದಲ್ಲಿದ್ದ ಕಾಲವೆಲ್ಲಾ ಅವನ ತಂದೆತಾಯಿಗಳು ಈ ಅರಸನ ಬಳಿಯಲ್ಲಿ ವಾಸವಾಗಿದ್ದರು.5 ಗಾದ್ ಪ್ರವಾದಿಯು ದಾವೀದನಿಗೆ, <<ನೀನು ಈ ದುರ್ಗದಲ್ಲಿರಬಾರದು, ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು>> ಎಂದು ಹೇಳಿದ್ದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು.ಸೌಲನು ನೋಬಿನ ಯಾಜಕರನ್ನು ಕೊಲ್ಲಿಸಿದ್ದು
6ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಬರ್ಜಿಯನ್ನು ಹಿಡಿದುಕೊಂಡು, ಗಿಬೆಯ ಗುಡ್ಡದ ಪಿಚುಲ ವೃಕ್ಷದ ಕೆಳಗೆ ಕುಳಿತುಕೊಂಡಿರಲು ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳವು ತಿಳಿದುಬಂದಿದೆ ಎಂಬ ಸುದ್ದಿಯು ಅವನಿಗೆ ಮುಟ್ಟಿತು.7ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, <<ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ?8ನನ್ನ ಮಗನು ಇಷಯನ ಮಗನೊಡನೆ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲವಲ್ಲಾ. ನನ್ನ ಸೇವಕನು ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ, ಅವನನ್ನು ಎಬ್ಬಿಸಿದ್ದಾನೆಂಬುದನ್ನು ಒಬ್ಬನಾದರೂ ನನಗೆ ಯಾಕೆ ತಿಳಿಸಲಿಲ್ಲ? ನೀವು ನನ್ನ ಚಿಂತೆಯನ್ನೇ ಬಿಟ್ಟಿದ್ದೀರಿ>> ಅಂದನು9ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, <<ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.10ಅವನು ಇವನಿಗೆ ಯೆಹೋವನ ಚಿತ್ತವನ್ನು ತಿಳಿಸಿ, ಆಹಾರವನ್ನೂ, ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು>> ಎಂದು ಹೇಳಿದನು.11ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನೂ, ಅವನ ಕುಟುಂಬಕ್ಕೆ ಸೇರಿದ ನೋಬದ ಬೇರೆ ಎಲ್ಲಾ ಯಾಜಕರೊಡನೆ ಕರೆದುಕೊಂಡು ಬರುವಂತೆ ಕಳುಹಿಸಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬರಲು,12ಸೌಲನು, <<ಅಹೀಟೂಬನ ಮಗನೇ ಕೇಳು>> ಅಂದನು. ಅದಕ್ಕೆ ಅವನು, <<ಒಡೆಯಾ ಅಪ್ಪಣೆಯಾಗಲಿ>> ಎಂದು ಉತ್ತರಕೊಟ್ಟನು.13ಆಗ ಸೌಲನು ಅವನಿಗೆ, <<ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು, ದೈವೋತ್ತರವನ್ನು ತಿಳಿಸಿದ್ದೇಕೆ?>> ಎಂದು ಕೇಳಿದನು14ಅವನು, <<ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಆಲೋಚಕರಲ್ಲೊಬ್ಬನು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ?15ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕರ ಮೇಲೆ ಅವನ ಮನೆಯವರ ಮೇಲೆ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ>> ಎಂದು ಉತ್ತರ ಕೊಟ್ಟನು.16ಆಗ ಅರಸನು ಅವನಿಗೆ, <<ಅಹೀಮೆಲೆಕನೇ ನೀನೂ ನಿನ್ನ ಮನೆಯವರೂ ಸಾಯಲೇ ಬೇಕು>> ಎಂದು ಹೇಳಿ ತನ್ನ ಬಳಿಯಲ್ಲಿದ್ದ17ಸಿಪಾಯಿಗಳಿಗೆ, <<ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ>> ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.18ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, <<ನೀನು ಹೋಗಿ ಅವರನ್ನು ಕೊಲ್ಲು>> ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.19ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ, ಶಿಶುಬಾಲಕರನ್ನೂ ದನ, ಕುರಿ, ಕತ್ತೆಗಳನ್ನು, ಕತ್ತಿಯಿಂದ ಸಂಹರಿಸಿದನು.20ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬುವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು,21ಸೌಲನು ಯೆಹೋವನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಿದನು.22ದಾವೀದನು ಎದೋಮ್ಯನಾದ ದೋಯೇಗನನ್ನು, <<ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ತಿಳಿದುಕೊಂಡೆನು. ನಿನ್ನ ಸಂಬಂಧಿಕರ ಸಾವಿಗೆ ನಾನೇ ಕಾರಣನಾದೆನಲ್ಲಾ.23 ನೀನಾದರೋ ಹೆದರದೆ ನನ್ನ ಸಂಗಡ ಇರು. ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವುದಾದರೆ ಸುರಕ್ಷಿತನಾಗಿರುವಿ>> ಎಂದನು.
23ದಾವೀದನು ಕೆಯೀಲಾ ಊರಿನಲ್ಲಿ ವಾಸಮಾಡಿದ್ದು
1ಫಿಲಿಷ್ಟಿಯರು ಕೆಯೀಲಕ್ಕೆ ಮುತ್ತಿಗೆ ಹಾಕಿ ಅಲ್ಲಿನ ಕಣಗಳನ್ನು ಸೂರೆಮಾಡುತ್ತಿದ್ದಾರೆ ಎಂಬ ವರ್ತಮಾನವು ದಾವೀದನಿಗೆ ಮುಟ್ಟಲು2ಅವನು, <<ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡೆಯಬಹುದೋ>> ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ, <<ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು>> ಎಂದು ಉತ್ತರ ಕೊಟ್ಟನು.3ಆದರೆ ದಾವೀದನ ಸೈನಿಕರು ಅವನಿಗೆ, <<ನಮಗೆ ಯೆಹೂದ ಸೀಮೆಯಲ್ಲಿಯೇ ಇಷ್ಟು ಭಯವಿರುವಾಗ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವುದಕ್ಕೆ ಕೆಯೀಲಕ್ಕೆ ಹೋದರೆ ಅಲ್ಲಿ ಇನ್ನೂ ಹೆಚ್ಚು ಭಯ ಉಂಟಾಗುತ್ತದೆ>> ಅಂದರು.4ಆದುದರಿಂದ ಅವನು ಪುನಃ ಯೆಹೋವನನ್ನು ಕೇಳಿದನು. ಆತನು, <<ನೀನೆದ್ದು ಕೆಯೀಲಕ್ಕೆ ಹೋಗು. ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು>> ಎಂದು ಉತ್ತರಕೊಟ್ಟನು.5ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ, ಫಿಲಿಷ್ಟಿಯರೊಡನೆ ಯುದ್ಧಮಾಡಿ, ಅವರನ್ನು ಸಂಪೂರ್ಣವಾಗಿ ಸೋಲಿಸಿ, ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು.6ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು,7ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿತು. ಆಗ ಅವನು, ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿ ಬಾಗಿಲುಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು,8ಕೆಯೀಲದಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹಿಡಿಯಲು ಹೋಗುವುದಕ್ಕೋಸ್ಕರ ಸೈನ್ಯವನ್ನು ಕೂಡಿಸಿದನು.9ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, <<ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ>> ಎಂದನು.10ಆಗ ದಾವೀದನು, <<ಇಸ್ರಾಯೇಲ್ಯರ ದೇವರಾದ ಯೆಹೋವನೇ ಸೌಲನು ಕೆಯೀಲಕ್ಕೆ ಬಂದು ನನ್ನ ನಿಮಿತ್ತವಾಗಿ ಪಟ್ಟಣವನ್ನು ಹಾಳು ಮಾಡಬೇಕೆಂದಿದ್ದಾನೆಂದು ನಿನ್ನ ಸೇವಕನಾದ ನನಗೆ ಸುದ್ದಿ ಬಂದಿತು.11ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೋ ಕೆಯೀಲಾ ಊರಿನವರು ನನ್ನನ್ನು ಅವನ ಕೈಗೆ ಒಪ್ಪಿಸುವರೋ? ಇಸ್ರಾಯೇಲರ ದೇವರಾದ ಯೆಹೋವನೇ ಈ ವಿಷಯದಲ್ಲಿ ಉತ್ತರ ದಯಪಾಲಿಸು>> ಎಂದು ಪ್ರಾರ್ಥಿಸಲು ಅವನು ಬರುವನೆಂಬುದಾಗಿ ಯೆಹೋವನಿಂದ ಉತ್ತರ ಸಿಕ್ಕಿತು.12ದಾವೀದನು ತಿರುಗಿ ಯೆಹೋವನನ್ನು, <<ಕೆಯೀಲದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ>> ಎಂದು ಕೇಳಿದಾಗ ಆತನು, <<ಒಪ್ಪಿಸಿಕೊಡುವರು>> ಎಂದು ಉತ್ತರಕೊಟ್ಟನು.13ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಮನಬಂದ ಕಡೆಗೆ ಅಲೆದಾಡಿದರು. ದಾವೀದನು ಕೆಯೀಲದಿಂದ ತಪ್ಪಿಸಿಕೊಂಡನೆಂದು ಸೌಲನಿಗೆ ಗೊತ್ತಾಗಲು ಅವನು ಹೊರಡುವುದನ್ನು ನಿಲ್ಲಿಸಿಬಿಟ್ಟನು.ದಾವೀದನು ಜೀಫ್ ಅರಣ್ಯದಲ್ಲಿ ಇದ್ದದ್ದು
14ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಅನಂತರ ಜೀಫ್ ಅರಣ್ಯದ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ಪ್ರತಿದಿನ ಅವನನ್ನು ಹುಡುಕುತ್ತಿದ್ದರೂ ದೇವರು ಅವನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.15ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.16ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ,17ದಾವೀದನಿಗೆ, <<ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ>> ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು.18ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.19ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, <<ಒಡೆಯಾ, ಕೇಳು ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ, ಅಂದರೆ ಅರಣ್ಯದ ದಕ್ಷಿಣದಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.20ಅರಸನು ತನ್ನ ಇಚ್ಛೆಯಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ. ಅವನನ್ನು ಅರಸನ ಕೈಗೆ ಒಪ್ಪಿಸುವ ಕೆಲಸ ನಮ್ಮದು>> ಎಂದು ಹೇಳಿದರು.21ಆಗ ಸೌಲನು ಅವರಿಗೆ, <<ನೀವು ನನ್ನ ಮೇಲೆ ಕನಿಕರ ತೋರಿಸಿ ಸಹಾಯ ಮಾಡುತ್ತಿರುವುದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.22ನೀವು ದಯವಿಟ್ಟು ಹೋಗಿ ಅವನು ಅಡಗಿಕೊಂಡಿರುವ ಸ್ಥಳವನ್ನು, ಅಲ್ಲಿ ಅವನನ್ನು ಕಂಡವರನ್ನೂ ಸೂಕ್ಷ್ಮವಾಗಿ ವಿಚಾರಿಸಿ, ತಿಳಿದುಕೊಳ್ಳಿರಿ. ಅವನು ಬಹು ಯುಕ್ತಿವಂತನೆಂದು ಕೇಳಿದ್ದೇನೆ.23ಆದುದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ಸರಿಯಾದ ವರ್ತಮಾನವನ್ನು ನನಗೆ ತಲುಪಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ದೇಶದಲ್ಲಿರುವುದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾಗಲಿ ಹುಡುಕಿ ಅವನನ್ನು ಕಂಡುಹಿಡಿಯುವೆನು>> ಅಂದನು.24ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ ಅರಣ್ಯದ ದಕ್ಷಿಣ ದಿಕ್ಕಿನಲ್ಲಿರುವ ಅರಾಬ್ ಎಂಬ ತಗ್ಗಾದ ಪ್ರದೇಶದಲ್ಲಿದ್ದನು.25ಸೌಲನು ತನ್ನ ಜನರೊಡನೆ ದಾವೀದನನ್ನು ಹಿಡಿಯುವುದಕ್ಕೆ ಬಂದನು. ಈ ವರ್ತಮಾನವು ದಾವೀದನಿಗೆ ತಲುಪಲು ಅವನು ಮಾವೋನಿನಲ್ಲಿರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು. ಸೌಲನು ಇದನ್ನು ಕೇಳಿ ಮಾವೋನ ಅರಣ್ಯಕ್ಕೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು.26ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ, ಅವನ ಜನರೂ ಬಂದು ಅವರನ್ನು ಮುತ್ತಿಗೆ ಹಾಕುವುದಕ್ಕಿದ್ದರು.27ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ, <<ಬೇಗ ಬಾ, ಫಿಲಿಷ್ಟಿಯರು ದೇಶದೊಳಗೆ ನುಗ್ಗಿದ್ದಾರೆ>> ಎಂದು ತಿಳಿಸಿದನು.28ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರ ವಿರುದ್ಧ ಯುದ್ಧಮಾಡಲು ಹೊರಟನು. ಆದುದರಿಂದ ಆ ಬೆಟ್ಟಕ್ಕೆ <<ಮಕ್ಹೆಲೋಕೆತ್>> ಎಂದರೆ <<ಪಾರಾದ ಬಂಡೆ>> ಎಂದು ಹೆಸರಾಯಿತು.29ದಾವೀದನು ಅಲ್ಲಿಂದ ಗಟ್ಟಾಹತ್ತಿ ಹೋಗಿ ಏಂಗೆದಿಯ ಗಿರಿಗಳಲ್ಲಿ ವಾಸಿಸಿದನು.
24ದಾವೀದನು ಸೌಲನಿಗೆ ಕೇಡುಮಾಡದೆ ಬಿಟ್ಟಿದ್ದು
1ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿದುಬಂದಿತು.2ಆಗ ಅವನು ಎಲ್ಲಾ ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡು, ಗವಿ ಬಂಡೆಗಳಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹುಡುಕುವುದಕ್ಕೋಸ್ಕರ ಹೊರಟನು.3ಅವನು ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕೋಸ್ಕರ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಭಾಗದಲ್ಲಿ ಅಡಗಿಕೊಂಡಿದ್ದರು.4ಜನರು ದಾವೀದನಿಗೆ <<ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ>> ಅಂದಾಗ ಅವನೆದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು.5ಅನಂತರ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿಯು ಅವನನ್ನು ಚುಚ್ಚತೊಡಗಿತು.6ಅವನು ತನ್ನ ಜನರಿಗೆ, <<ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ, ನನ್ನ ಒಡೆಯನೂ ಆಗಿದ್ದಾನೆ. ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿ ಮಾಡಲಿ>> ಎಂದು ಹೇಳಿದನು7ಈ ಮಾತುಗಳಿಂದ ಅವನು ಸೌಲನಿಗೆ ವಿರೋಧವಾಗಿ ಏಳದಂತೆ ತನ್ನ ಜನರನ್ನು ತಡೆದನು. ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದ ಮೇಲೆ8ದಾವೀದನೂ ಹೊರಗೆ ಬಂದು, <<ಅರಸನೇ ನನ್ನ ಒಡೆಯನೇ>> ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಲು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ,9<<ದಾವೀದನು ನಿನಗೆ ಕೇಡುಮಾಡಬೇಕೆಂದಿರುತ್ತಾನೆಂದು ಹೇಳುವವರ ಮಾತಿಗೆ ನೀನೇಕೆ ಕಿವಿಗೊಡುತ್ತೀ?10ಈ ಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆಂಬುದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, <ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವುದಿಲ್ಲ> ಎಂದು ಹೇಳಿ ನಿನ್ನನ್ನು ಉಳಿಸಿದೆನು.11ನನ್ನ ತಂದೆಯೇ, ಇಗೋ ನೋಡು, ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ. ನಾನು ನಿನ್ನನ್ನು ಕೊಲ್ಲದೆ, ನಿನ್ನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡೆನಷ್ಟೇ ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿಯಲ್ಲಾ.12 ಯೆಹೋವನೇ ನಮ್ಮಿಬ್ಬರ ಮಧ್ಯೆ ವ್ಯಾಜ್ಯವನ್ನು ತೀರಿಸಲಿ. ಆತನೇ ನನಗೋಸ್ಕರ ನಿನಗೆ ಮುಯ್ಯಿ ತೀರಿಸಲಿ. ನಾನಂತೂ ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ.13<ಕೆಟ್ಟವರಿಂದಲೇ ಕೆಡುಕು> ಎಂಬುದಾಗಿ ಹಿರಿಯರ ಗಾದೆಯುಂಟಷ್ಟೆ. ನಾನು ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ.14ಇಸ್ರಾಯೇಲರ ಅರಸನೇ ಯಾರನ್ನು ಹಿಂಬಾಲಿಸಿ ಹೊರಟಿರುವೇ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೋ? ಒಂದು ಬಡ ನೊಣವನ್ನೋ?.15ಯೆಹೋವನು ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ. ಆತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಯಿಂದ ತಪ್ಪಿಸಲಿ>> ಎಂದು ಹೇಳಿದನು.16ದಾವೀದನ ಮಾತುಗಳು ಮುಗಿದ ನಂತರ ಸೌಲನು, <<ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?>> ಅಂದು ಗಟ್ಟಿಯಾಗಿ ಅತ್ತನು.17ಇದಲ್ಲದೆ ಅವನು ದಾವೀದನಿಗೆ, <<ನೀನು ನನಗಿಂತ ನೀತಿವಂತನೂ. ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದಿ.18ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ಹೊತ್ತು ಪ್ರಕಟವಾಯಿತು.19ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈ ಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರ ಮಾಡಲಿ.20ಕೇಳು, ನೀನು ಹೇಗೂ ಅರಸನಾಗುವಿ ಎಂದೂ ಇಸ್ರಾಯೇಲ್ ರಾಜ್ಯವು ನಿನ್ನಿಂದ ಸ್ಥಿರವಾಗುವುದೆಂದು ಬಲ್ಲೆನು.21ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದಿಲ್ಲವೆಂದೂ, ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡು>> ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು.22ಅನಂತರ ಸೌಲನು ತನ್ನ ಮನೆಗೆ ಹೊರಟನು. ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು.
25ಸಮುವೇಲನ ಮರಣ
1ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.ದಾವೀದನೂ, ನಾಬಾಲ ಮತ್ತು ಅಬೀಗೈಲರೂ
2ಕರ್ಮೆಲಿನಲ್ಲಿ ಸ್ವಂತ ಸೊತ್ತು ಹೊಂದಿದ್ದ ಒಬ್ಬ ಮನುಷ್ಯನಿದ್ದನು. ಅವನು ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ್.3ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹು ಬುದ್ಧಿವಂತೆಯೂ, ಸುಂದರಿಯೂ ಆಗಿದ್ದಳು. ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ, ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಶ್ರೀಮಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ, ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.4ನಾಬಾಲನು ಉಣ್ಣೆ ಕತ್ತರಿಸುತ್ತಿದ್ದಾನೆಂಬ ವರ್ತಮಾನವು ಅಲ್ಲಿ ಮರುಭೂಮಿಯಲ್ಲಿದ್ದ ದಾವೀದನಿಗೆ ಮುಟ್ಟಿತು.5ಅವನು ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ, <<ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿರಿ.6ಅವನಿಗೆ ನನ್ನ ಹೆಸರಿನಲ್ಲಿ < ನಿನಗೂ, ನಿನ್ನ ಕುಟುಂಬಕ್ಕೂ, ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.7ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸವು ನಡೆಯುತ್ತದೆಂಬ ವರ್ತಮಾನವನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ. ಅವರಿಗೇನೂ ನಷ್ಟವಾಗಲಿಲ್ಲ.8ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಕೊಡು> ಎಂದು ಹೇಳಿರಿ>> ಎಂದು ಅವರನ್ನು ಕಳುಹಿಸಿದನು.9ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿ ಉತ್ತರಕ್ಕಾಗಿ ಕಾಯುತ್ತಿದ್ದರು.10ನಾಬಾಲನು ಅವರಿಗೆ, <<ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ.11ಉಣ್ಣೆಕತ್ತರಿಸುವವರಿಗೋಸ್ಕರ ನಾನು ಸಿದ್ಧ ಮಾಡಿಸಿರುವ ಮಾಂಸವನ್ನು ಆಹಾರಪಾನಗಳನ್ನೂ, ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ?>> ಎಂದು ಉತ್ತರ ಕೊಟ್ಟನು.12ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ,13ಅವನು ತನ್ನ ಜನರಿಗೆ <<ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ>> ಎಂದು ಆಜ್ಞಾಪಿಸಿದನು. ಅವರೆಲ್ಲರು ಕಟ್ಟಿಕೊಂಡರು. ದಾವೀದನೂ ಸೊಂಟಕ್ಕೆ ಕತ್ತಿಯನ್ನು ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು. ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.14ನಾಬಾಲನ ಸೇವಕರಲ್ಲಿ ಒಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, <<ಮರುಭೂಮಿಯಲ್ಲಿರುವ ದಾವೀದನು ನಮ್ಮ ಧಣಿಯ ಕ್ಷೇಮವಿಚಾರಕ್ಕಾಗಿ ದೂತರನ್ನು ಕಳುಹಿಸಲು, ಧಣಿಯು ಬಂದವರನ್ನು ಬೈದನು ಕಳುಹಿಸಿದನು.15ಆ ಜನರು ನಮಗೆ ಬಹಳ ಉಪಕಾರ ಮಾಡಿದವರು. ನಾವು ಅವರೊಡನೆ ಮರುಭೂಮಿಯಲ್ಲಿದ್ದ ಕಾಲವೆಲ್ಲಾ ಅವರು ನಮಗೆ ಏನೂ ತೊಂದರೆಕೊಡಲಿಲ್ಲ, ನಾವು ನಷ್ಟಹೊಂದಲಿಲ್ಲ.16ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನೆ ಇದ್ದಾಗ ಅವರು ಹಗಲಿರುಳು ನಮಗೆ ಕಾವಲು ಗೋಡೆಯಂತಿದ್ದರು.17ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ>> ಎಂದು ಹೇಳಿದನು.18ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳು, ಅಂಜೂರ ಹಣ್ಣುಗಳು, ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ,19ತನ್ನ ಸೇವಕರಿಗೆ, <<ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ>> ಎಂದು ಹೇಳಿ ಅವರನ್ನು ಕಳುಹಿಸಿದಳು. ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.20ಆಕೆ ಕತ್ತೆಯ ಮೇಲೆ ಕುಳಿತುಕೊಂಡು ಗುಡ್ಡದ ಬದಿಯಲ್ಲಿ ಹೋಗುತ್ತಿರುವಾಗ, ದಾವೀದನೂ ಅವನ ಜನರೂ ಗುಡ್ಡ ಇಳಿದು ಆ ಕಡೆಯಿಂದ ಬರಲು ಆಕೆಯು ಅವರನ್ನು ಎದುರುಗೊಂಡಳು.21ಅಷ್ಟರಲ್ಲಿ ದಾವೀದನು, <<ನಾನು ಮರುಭೂಮಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದನು.22ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ>> ಎಂದು ಪ್ರತಿಜ್ಞೆ ಮಾಡಿದನು.23ಅಬೀಗೈಲಳು ದಾವೀದನನ್ನು ಕಂಡ ಕೂಡಲೇ ಕತ್ತೆಯಿಂದಿಳಿದು, ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು.24ಆ ಮೇಲೆ ಅವನ ಪಾದಗಳ ಮೇಲೆ ಬಿದ್ದು ಅವನಿಗೆ, <<ಸ್ವಾಮೀ ಅಪರಾಧವು ನನ್ನ ಮೇಲೆ ಇರಲಿ. ನಿನ್ನ ದಾಸಿಯು ಮಾತನಾಡುವುದಕ್ಕೆ ಅಪ್ಪಣೆಯಾಗಲಿ. ನನ್ನ ಮಾತನ್ನು ಲಾಲಿಸಬೇಕು.25ಸ್ವಾಮಿಯು ಆ ಮೂರ್ಖನಾದ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ. ಹೆಸರಿಗೆ ತಕ್ಕಂತೆ ಅವನು ಮೂರ್ಖನೇ ಆಗಿದ್ದಾನೆ. ನಿನ್ನ ದಾಸಿಯಾದ ನಾನು ಸ್ವಾಮಿಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.26ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.27ನಿನ್ನ ದಾಸಿಯು ತಂದ ಈ ಕಾಣಿಕೆಯನ್ನು ಸ್ವಾಮಿಯು ತಮ್ಮ ಸೇವಕರಿಗೆ ಸಲ್ಲಿಸಲಿ.28ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ. ಸ್ವಾಮಿಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ.29ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವತೆಗೆಯಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ.30ಯೆಹೋವನು ನನ್ನ ಸ್ವಾಮಿಯಾದ ನಿನಗೆ ವಾಗ್ದಾನಮಾಡಿರುವ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಲಿ. ನಿನ್ನನ್ನು ಇಸ್ರಾಯೇಲ್ಯರ ಪ್ರಭುವನ್ನಾಗಿ ಮಾಡಿದ ಮೇಲೆ,31ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿ ತೀರಿಸಿದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವುದಿಲ್ಲ. ಆತನೇ ನಿನ್ನನ್ನು ಮಹಾ ಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ>> ಅಂದಳು.32ಆಗ ದಾವೀದನು ಅಬೀಗೈಲಳಿಗೆ, <<ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ.33ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ, ನಿನ್ನ ಬುದ್ಧಿಯೂ ಸ್ತೋತ್ರಾರ್ಹವೆ. ಸರಿ.34ನಿನಗೆ ಕೇಡು ಮಾಡದಂತೆ ನನ್ನನ್ನು ತಡೆದ ಇಸ್ರಾಯೇಲರ ದೇವರಾದ ಯೆಹೋವನ ಆಣೆ, ನೀನು ಬೇಗನೇ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿರಲಿಲ್ಲ>> ಎಂದು ಹೇಳಿದನು.35ಅವನು ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ <<ಸಮಾಧಾನದಿಂದ ಮನೆಗೆ ಹೋಗು, ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ>> ಅಂದನು.ನಾಬಾಲನ ಮರಣ
36ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.37ಮರುದಿನ ಬೆಳಿಗ್ಗೆ ಅಮಲಿಳಿದ ನಂತರ ಈಕೆಯು ಈ ವರ್ತಮಾನವನ್ನು ಅವನಿಗೆ ತಿಳಿಸಲಾಗಿ, ಅವನ ಹೃದಯವೇ ನಿಂತಂತೆ ಆಯಿತು. ಅವನು ಸ್ತಬ್ಧನಾದನು.38ಸುಮಾರು ಹತ್ತು ದಿನಗಳಾದನಂತರ ನಾಬಾಲನು ಯೆಹೋವನಿಂದ ಹತನಾಗಿ ಸತ್ತನು.39ನಾಬಾಲನು ಸತ್ತನೆಂಬ ವರ್ತಮಾನವು ದಾವೀದನು ಕೇಳಿ, <<ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂತ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ>> ಎಂದು ಹೇಳಿದನು. ಅನಂತರ ಅವನು ಅಬೀಗೈಲಳನ್ನು ತನಗೆ ಹೆಂಡತಿಯಾಗಿರಬೇಕೆಂದು ದೂತರ ಮೂಲಕ ಹೇಳಿ ಕಳುಹಿಸಿದನು.40ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, <<ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿರುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾನೆ>> ಅಂದರು.41ಆಕೆ ಎದ್ದು ನಮಸ್ಕಾರಮಾಡಿ ಸೇವಕರಿಗೆ, <<ನಿನ್ನ ದಾಸಿಯಾದ ನಾನು ನನ್ನ ಸ್ವಾಮಿಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವುದಕ್ಕೆ ಸಿದ್ಧಳಾಗಿದ್ದೇನೆ>> ಎಂದು ಉತ್ತರಕೊಟ್ಟು,42ಬೇಗನೇ ಒಂದು ಕತ್ತೆಯನ್ನು ಹತ್ತಿ, ತನ್ನ ಐದು ಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲಿ ಹೊರಟು ಹೋಗಿ ಅವನ ಹೆಂಡತಿಯಾದಳು.43ಇದಲ್ಲದೆ ದಾವೀದನು ಇಜ್ರೇಲಿನವಳಾದ ಅಹೀನೋವಮಳನ್ನು ಮದುವೆಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು.44 ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಪುನಃ ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟನು.
26ದಾವೀದನು ಪುನಃ ಸೌಲನನ್ನು ಕೊಲ್ಲದೆ ಉಳಿಸಿದ್ದು
1ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, <<ದಾವೀದನು ಅರಣ್ಯದ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿರುವುದು ನಿನಗೆ ಗೊತ್ತಿಲ್ಲವೋ?>> ಅಂದರು.2ಆಗ ಸೌಲನು ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ದಾವೀದನನ್ನು ಹುಡುಕುವುದಕ್ಕೋಸ್ಕರ ಜೀಫ್ ಅರಣ್ಯಕ್ಕೆ ಹೋಗಿ ಅದರ ಮೂಡಣದಿಕ್ಕಿನಲ್ಲಿ,3ದಾರಿಯ ಬಳಿಯಲ್ಲಿರುವ ಹಕೀಲಾ ಬೆಟ್ಟದಲ್ಲಿ ಪಾಳೆಯಮಾಡಿಕೊಂಡರು. ಸೌಲನು ತನ್ನನ್ನು ಹಿಡಿಯುವುದಕ್ಕೋಸ್ಕರ ಅರಣ್ಯಕ್ಕೆ ಬಂದಿದ್ದಾನೆಂಬ ವರ್ತಮಾನವು ಅಲ್ಲಿಯೇ ಇದ್ದ ದಾವೀದನಿಗೆ ತಲುಪಲು4ಅವನು ಕೂಡಲೇ ಗೂಢಚಾರರನ್ನು ಕಳುಹಿಸಿ ಸೌಲನು ಇಳಿದುಕೊಂಡಿದ್ದ ಸ್ಥಳವನ್ನು ಗೊತ್ತುಮಾಡಿಕೊಂಡನು.5ಅನಂತರ ತಾನಾಗಿಯೇ ಸೌಲನ ಪಾಳೆಯದ ಹತ್ತಿರ ಹೋಗಿ, ಸೌಲನೂ, ನೇರನ ಮಗನಾದ ಅವನ ಸೇನಾಪತಿ ಅಬ್ನೇರನೂ ಮಲಗಿದ್ದ ಸ್ಥಳಗಳನ್ನು ಕಂಡುಹಿಡಿದನು. ಸೌಲನು ರಥಗಳನ್ನು ಬಿಟ್ಟಿರುವ ಸ್ಥಳಮಧ್ಯದಲ್ಲಿ ಮಲಗಿದ್ದನು. ಅವನ ಸುತ್ತಲೂ ಸೈನಿಕರು ಇದ್ದರು.6ಆಗ ದಾವೀದನು ಹಿತ್ತಿಯನ ಮಗನಾದ ಅಹೀಮೆಲೆಕನಿಗೂ, ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, <<ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?>> ಎಂದು ಕೇಳಿದ್ದಕ್ಕೆ ಅಬೀಷೈಯು, <<ನಾನು ಬರುತ್ತೇನೆ>> ಎಂದು ಉತ್ತರ ಕೊಟ್ಟನು.7ದಾವೀದನೂ ಮತ್ತು ಅಬೀಷೈಯೂ ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯದಲ್ಲಿ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಬರ್ಜಿಯು ಅವನ ತಲೆಯ ಹತ್ತಿರ ನೆಲದಲ್ಲಿ ನೆಡಲ್ಪಟ್ಟಿತ್ತು. ಅಬ್ನೇರನೂ, ಸೈನಿಕರೂ ಅವನ ಸುತ್ತಲೂ ಮಲಗಿದ್ದರು.8ಅಬೀಷೈಯು ದಾವೀದನಿಗೆ, <<ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿದ್ದಾನೆ, ಅಪ್ಪಣೆಯಾಗಲಿ ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು. ಎರಡನೆಯ ಸಾರಿ ಹೊಡೆಯುವಂತ ಅವಕಾಶವಿರುವುದಿಲ್ಲ>> ಎಂದು ಹೇಳಿದನು.9ಆದರೆ ದಾವೀದನು, <<ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ?>> ಅಂದನು.10ಇದಲ್ಲದೆ ದಾವೀದನು, <<ಯೆಹೋವನ ಆಣೆ, ಅವನು ಯೆಹೋವನಿಂದ ಸಾಯುವನು, ಇಲ್ಲವೆ ಕಾಲ ತುಂಬಿದ ಮೇಲೆ ಮರಣ ಹೊಂದುವನು ಅಥವಾ ಯುದ್ಧದಲ್ಲಿ ಸಾಯುವನು.11ತನ್ನ ಅಭಿಷಿಕ್ತನಿಗೆ ಕೈಯೆತ್ತದಂತೆ ಯೆಹೋವನು ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನು, ನೀರಿನ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ>> ಎಂದು ಹೇಳಿ12ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.13ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸ್ವಲ್ಪ ದೂರಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತು,14<<ಅಬ್ನೇರನೇ ಕಿವಿಗೊಡುವುದಿಲ್ಲವೋ?>> ಎಂದು ನೇರನ ಮಗನಾದ ಅವನಿಗೂ, ಸೈನಿಕರಿಗೂ ಕೇಳಿಸುವಂತೆ ಕೂಗಿದನು. ಅಬ್ನೇರನು, <<ಅರಸನನ್ನು ಕೂಗುವ ನೀನಾರು?>> ಎಂದು ಕೇಳಿದನು.15ದಾವೀದನು ಅಬ್ನೇರನಿಗೆ, <<ನೀನು ಶೂರನಲ್ಲವೋ? ಇಸ್ರಾಯೇಲರಲ್ಲಿ ನಿನಗೆ ಸಮಾನನಾದವನು ಯಾರು? ನೀನು ನಿನ್ನ ಒಡೆಯನಾದ ಅರಸನನ್ನು ಯಾಕೆ ಕಾಯಲಿಲ್ಲ. ಜನರಲ್ಲೊಬ್ಬನು ಒಳಕ್ಕೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.16ನೀನು ಹೀಗೆ ಮಾಡುವುದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು>> ಎಂದು ಕೂಗಿ ಹೇಳಿದನು.17ಸೌಲನು ದಾವೀದನ ಸ್ವರದ ಗುರುತು ಹಿಡಿದು ಅವನನ್ನು, <<ದಾವೀದನೇ ನನ್ನ ಮಗನೇ, ಇದು ನಿನ್ನ ಸ್ವರವೋ>> ಎಂದು ಕೇಳಲು ಅವನು, <<ಅರಸನೇ, ನನ್ನ ಒಡೆಯನೇ ಹೌದು, ನನ್ನ ಸ್ವರವೇ,18ನನ್ನ ಸ್ವಾಮಿಯು ತನ್ನ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೇ? ನಾನೇನು ಮಾಡಿದೆನು?19ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ <ಹೋಗಿ ಅನ್ಯದೇವತೆಗಳನ್ನು ಸೇವಿಸು> ಎಂದು ನನ್ನನ್ನು ತಳ್ಳಿಬಿಟ್ಟರು.20ಯೆಹೋವನ ಸಾನ್ನಿಧ್ಯವಿಲ್ಲದಿರುವ ದೇಶದಲ್ಲಿ ನನ್ನ ರಕ್ತವು ಸುರಿಸಲ್ಪಡದಿರಲಿ. ಅಯ್ಯೋ ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಲು ಹೊರಟ ಬೇಟೆಗಾರನೋ ಎಂಬಂತೆ ಇಸ್ರಾಯೇಲರ ಅರಸನು ಹೊರಟು ಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ>> ಅಂದನು.21ಆಗ ಸೌಲನು ಅವನಿಗೆ, <<ನಾನು ಪಾಪಮಾಡಿದೆನು, ದಾವೀದನೇ ನನ್ನ ಮಗನೇ ಹಿಂದಿರುಗಿ ಬಾ. ಈ ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ಈ ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ>> ಎಂದು ಹೇಳಿದನು22ದಾವೀದನು ಅರಸನಿಗೆ, <<ಅರಸನೇ, ಇಗೋ ನಿನ್ನ ಬರ್ಜಿ ಇಲ್ಲಿದೆ, ಸೇವಕರಲ್ಲೊಬ್ಬನು ಬಂದು ಅದನ್ನು ತೆಗೆದುಕೊಂಡು ಹೋಗಲಿ.23ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.24ನಾನು ಈ ಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿದಂತೆ ಯೆಹೋವನು ನನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿ, ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ>> ಎಂದನು.25ಆಗ ಸೌಲನು ದಾವೀದನಿಗೆ, <<ನನ್ನ ಮಗನೇ ದಾವೀದನೇ ನೀನು ಆಶೀರ್ವಾದ ಹೊಂದು. ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ>> ಎಂದು ಹೇಳಿ ತನ್ನ ಊರಿಗೆ ಹೊರಟನು. ದಾವೀದನು ತನ್ನ ದಾರಿಯನ್ನು ಹಿಡಿದನು.
27ದಾವೀದನು ಫಿಲಿಷ್ಟಿಯರ ನಡುವೆ ವಾಸಿಸಿದ್ದು
1ದಾವೀದನು ತನ್ನ ಮನಸ್ಸಿನಲ್ಲಿ, <<ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು>> ಅಂದುಕೊಂಡನು.2ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.3ಅವನೂ, ಅವನ ಜನರೂ ತಮ್ಮ ತಮ್ಮ ಕುಟುಂಬ ಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ವಾಸಮಾಡಿದರು. ದಾವೀದನ ಹೆಂಡತಿಯರಾಗಿರುವ ಇಜ್ರೇಲ್ಯಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು.4ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿದ ಮೇಲೆ ಅವನನ್ನು ಹುಡುಕಲೇ ಇಲ್ಲ.5ಒಂದು ದಿನ ದಾವೀದನು ಆಕೀಷನಿಗೆ, <<ನಿನ್ನ ಸೇವಕನಾದ ನಾನು ನಿನ್ನ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರು ಒಂದು ಪಟ್ಟಣದಲ್ಲಿ ನನಗೆ ಸ್ಥಳಕೊಡು. ನಾನು ಅಲ್ಲಿ ವಾಸಮಾಡುವೆನು>> ಅಂದನು.6ಆಕೀಷನು ಕೂಡಲೇ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದ್ದರಿಂದ ಚಿಕ್ಲಗ್ ಎಂಬುದು ಇಂದಿನವರೆಗೂ ಯೆಹೂದ ರಾಜರಿಗೆ ಸೇರಿದೆ.7ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ನಾಲ್ಕು ತಿಂಗಳೂ ವಾಸವಾಗಿದ್ದನು.8ಆ ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು.9ದಾವೀದನು ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ಎಲ್ಲಾ ನಿವಾಸಿಗಳನ್ನು ಕೊಂದು, ಕುರಿ, ದನ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ಆಕೀಷನ ಬಳಿಗೆ ಹೋಗುತ್ತಿದ್ದನು.10ಆಕೀಷನು ಅವನನ್ನು <<ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ>> ಎಂದು ಕೇಳುವನು. ದಾವೀದನು ಅವನಿಗೆ <<ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ>> ಹೇಳುವರು.11ದಾವೀದನು ತನ್ನ ಕೃತ್ಯವನ್ನು ಜನರು ಹೇಳಾರೆಂದು ನೆನಸಿ, ಅವನು ಯಾರನ್ನೂ ಗತ್ ಊರಿಗೆ ತಾರದೆ, ಎಲ್ಲಾ ಸ್ತ್ರೀಪುರುಷರನ್ನು ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.12ದಾವೀದನ ಹೆಸರು ಸ್ವಜನರಾದ ಇಸ್ರಾಯೇಲರಲ್ಲಿ ತನ್ನ ಹೆಸರನ್ನು ಕೆಡಿಸಿಕೊಂಡಿದ್ದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು.
281ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ, <<ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲಿ ಬರಬೇಕೆಂಬುದು ನಿನಗೆ ಗೊತ್ತಿಲ್ಲವೋ>> ಎನ್ನಲು ದಾವೀದನು,2<<ಹೌದು ನಿನ್ನ ದಾಸನ ಸಾಹಸವು ಗೊತ್ತಾಗುವುದು>> ಅಂದನು. ಆಕೀಷನು ಅವನಿಗೆ, <<ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುವೆನು>> ಅಂದನು.ಸೌಲನು ಒಬ್ಬ ಯಕ್ಷಿಣಿಯನ್ನು ವಿಚಾರಿಸಿದ್ದು
3ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.4ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡರು. ಸೌಲನು ಎಲ್ಲಾ ಇಸ್ರಾಯೇಲರೊಡನೆ ಬಂದು, ಗಿಲ್ಬೋವದಲ್ಲಿ ಇಳಿದುಕೊಂಡರು.5ಅವನು ಫಿಲಿಷ್ಟಿಯರ ಪಾಳೆಯವನ್ನು ಕಂಡು ಬಹಳ ಭಯದಿಂದ ಎದೆಯೊಡೆದವನಂತಾದನು.6ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.7ಆದುದರಿಂದ ಅವನು ತನ್ನ ಸೇವಕರಿಗೆ, <<ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು>> ಎಂದು ಹೇಳಿದನು. ಆಗ ಅವರು, <<ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ>> ಅಂದರು.8ಆಗ ಸೌಲನು ವಸ್ತ್ರಗಳಿಂದ ತನ್ನನ್ನು ಮಾರ್ಪಡಿಸಿಕೊಂಡು, ಇಬ್ಬರು ಸೇವಕರೊಡನೆ ಹೊರಟು, ರಾತ್ರಿಯಲ್ಲಿ ಆಕೆಯ ಮನೆ ಸೇರಿ, <<ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು. ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು>> ಎಂದು ಆಕೆಯನ್ನು ಬೇಡಿಕೊಂಡನು9ಆಗ ಆಕೆಯು ಅವನಿಗೆ, <<ಸೌಲನು ಮಾಡಿದ್ದು ನಿನಗೆ ಗೊತ್ತುಂಟು. ಅವನು ಸತ್ತವರಲ್ಲಿ ವಿಚಾರಿಸುವವರನ್ನು ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನಲ್ಲಾ, ಹೀಗಿದ್ದರೂ ನಾನೂ ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರುಲೊಡ್ಡುವುದೇಕೆ?>> ಅಂದಳು.10ಅದಕ್ಕೆ ಸೌಲನು, <<ಯೆಹೋವನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ>> ಎಂದು ಆಕೆಗೆ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದನು.11ಆಗ ಸ್ತ್ರೀಯು, <<ನಿನಗೆ ಯಾರನ್ನು ಬರಮಾಡಬೇಕು?>> ಎನ್ನಲು, <<ಸಮುವೇಲನನ್ನು>> ಎಂದು ಉತ್ತರಕೊಟ್ಟನು.12ಆ ಸ್ತ್ರೀಯು ಸಮುವೇಲನನ್ನು ಕಂಡಕೂಡಲೇ ಗಟ್ಟಿಯಾಗಿ ಕೂಗಿ ಸೌಲನಿಗೆ, <<ನೀನು ನನ್ನನ್ನು ವಂಚಿಸಿದ್ದೇಕೆ, ನೀನು ಸೌಲನಲ್ಲವೋ?>> ಅಂದಳು.13ಅರಸನು, <<ಹೆದರಬೇಡ, ನಿನಗೇನು ಕಾಣಿಸುತ್ತದೆ?>> ಎಂದು ಆಕೆಯನ್ನು ಕೇಳಲು, <<ಭೂಮಿಯೊಳಗಿಂದ ಒಬ್ಬ ದೇವನು ಬರುತ್ತಿರುವುದನ್ನು ನೋಡುತ್ತೇನೆ>> ಎಂದು ಉತ್ತರ ಕೊಟ್ಟಳು.14ಅವನು ತಿರುಗಿ, <<ಅವನ ರೂಪ ಹೇಗಿದೆ?>> ಎಂದು ಕೇಳಲು ಆಕೆಯು, <<ನಿಲುವಂಗಿಯನ್ನು ಉಟ್ಟುಕೊಂಡ ಒಬ್ಬ ಮುದುಕನು ಬರುತ್ತಿದ್ದಾನೆ>> ಎಂದು ಹೇಳಿದಳು. ಅವನು ಸಮುವೇಲನೆ ಎಂದು ಸೌಲನು ತಿಳಿದು, ನೆಲದ ಮಟ್ಟಿಗೂ ಬೊಗ್ಗಿ ನಮಸ್ಕರಿಸಿದನು.15ಆಗ ಸಮುವೇಲನು ಸೌಲನನ್ನು, <<ನೀನು ನನ್ನ ವಿಶ್ರಾಂತಿಯನ್ನು ಕೇಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದೆ?>> ಎಂದು ಕೇಳಿದನು. ಅದಕ್ಕೆ ಸೌಲನು, <<ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ. ದೇವರು ನನ್ನನ್ನು ಬಿಟ್ಟು ದೂರ ಹೋಗಿದ್ದಾನೆ. ಆತನು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದುದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು>> ಅಂದನು.16ಆಗ ಸಮುವೇಲನು, <<ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ, ನೀನು ನನ್ನನ್ನು ವಿಚಾರಿಸುವುದೇಕೆ?17ಆತನು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾನೆ. ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾನೆ.18ನೀನು ಯೆಹೋವನ ಮಾತನ್ನು ಕೇಳಲಿಲ್ಲ. ಆತನು ಅಮಾಲೇಕ್ಯರ ಮೇಲೆ ಉಗ್ರಕೊಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದ್ದರಿಂದ ಯೆಹೋವನು ಈಗ ನಿನಗೆ ಹೀಗೆ ಮಾಡಿದ್ದಾನೆ.19ಆತನು ನಿನ್ನ ಕೂಡ ಇಸ್ರಾಯೇಲ್ಯರೆಲ್ಲರನ್ನೂ ಫಿಲಿಷ್ಟಿಯರ ಕೈಗೆ ಒಪ್ಪಿಸುವನು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಆತನು ಇಸ್ರಾಯೇಲ್ಯರ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವನು>> ಎಂದು ಹೇಳಿದನು.20ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೇ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿನ ಊಟಮಾಡಲಿಲ್ಲವಾದ್ದರಿಂದ ಅವನಲ್ಲಿ ಬಲವೇ ಇರಲಿಲ್ಲ.21ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ, <<ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿದೆನು. ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.22ಆದುದರಿಂದ ನೀನು ದಯವಿಟ್ಟು ನಿನ್ನ ದಾಸಿಯ ಮಾತನ್ನು ಕೇಳಬೇಕು. ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡು>> ಎಂದು ಹೇಳಿದಳು.23ಅವನು, <<ಒಲ್ಲೆನು, ಊಟಮಾಡುವುದಿಲ್ಲ>> ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದ್ದರಿಂದ ಅವನು ಅವರ ಮಾತಿಗೆ ಒಪ್ಪಿಕೊಂಡು ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.24ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು, ಸಿದ್ಧಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು.25ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು.
29ಫಿಲಿಷ್ಟಿಯ ಪ್ರಭುಗಳು ದಾವೀದನನ್ನು ತಿರಸ್ಕರಿಸಿದ್ದು
1ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.2ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿ, ಬರುತ್ತಿರುವಾಗ ದಾವೀದನು ಅವನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಬಾಲಿಸುತ್ತಿದ್ದನು.3ಆಗ ಫಿಲಿಷ್ಟಿಯ ಪ್ರಭುಗಳು, <<ಈ ಇಬ್ರಿಯರು ಯಾಕೆ?>> ಎಂದು ಆಕೀಷನನ್ನು ಕೇಳಿದರು. ಅವನು ಅವರಿಗೆ, <<ಇವನು ಇಸ್ರಾಯೇಲರ ಅರಸನಾದ ಸೌಲನ ಸೇವಕ ದಾವೀದನಲ್ಲವೋ, ಇವನು ಇಷ್ಟು ವರ್ಷ, ಇಷ್ಟು ದಿನಗಳಿಂದ ನನ್ನ ಬಳಿಯಲ್ಲಿದ್ದಾನೆ. ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿನ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ>> ಎಂದು ಉತ್ತರಕೊಟ್ಟನು.4ಆದರೆ ಫಿಲಿಷ್ಟಿಯ ಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ, <<ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ ಸ್ಥಳದಲ್ಲೇ ವಾಸಿಸಲಿ. ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು, ಫಿಲಿಷ್ಟಿಯರ ತಲೆಗಳನ್ನು ಕಡಿದಿದ್ದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?5<ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು> ಎಂದು ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಈ ದಾವೀದನನ್ನು ಕುರಿತೇ ಅಲ್ಲವೇ?>> ಅಂದರು.6ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, <<ಯೆಹೋವನಾಣೆ ನೀನು ಯಥಾರ್ಥನು. ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಾನು ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ.7ಆದರೆ ಪ್ರಭುಗಳು ನಿನ್ನನ್ನು ಮೆಚ್ಚುವುದಿಲ್ಲ. ಆದ್ದರಿಂದ ನೀನು ಸಮಾಧಾನದಿಂದ ಹಿಂದಿರುಗಿ ಹೋಗು ಅವರನ್ನು ಸಿಟ್ಟುಗೊಳಿಸಬಾರದು>> ಎಂದು ಹೇಳಿದನು.8ದಾವೀದನು ಆಕೀಷನಿಗೆ, <<ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದ ದಿನದಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ, ಅವನ ಶತ್ರುಗಳೊಡನೆ ನಾನೇಕೆ ಯುದ್ಧ ಮಾಡಬಾರದು?>> ಅಂದನು.9ಆಗ ಆಕೀಷನು ದಾವೀದನಿಗೆ, <<ನೀನು ಒಳ್ಳೆಯವನೆಂದು ನನಗೆ ಗೊತ್ತದೆ, ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ. ಆದರೆ ಫಿಲಿಷ್ಟಿಯ ಪ್ರಭುಗಳು, <ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು> ಎಂದು ಹೇಳುತ್ತಾರಲ್ಲಾ.10ಆದುದ್ದರಿಂದ ನೀನೂ, ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ, ನಾಳೆ ಬೆಳಿಗ್ಗೆ ಎದ್ದು ಹೊತ್ತು ಮೂಡಿದ ಕೂಡಲೆ ಹಿಂದಿರುಗಿ ಹೋಗಿರಿ>> ಎಂದು ಹೇಳಿದನು.11ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು.
30ದಾವೀದನು ಅಮಾಲೇಕ್ಯರನ್ನು ಸಂಹರಿಸಿದ್ದು
1ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ,2ಆ ಊರಿನಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿದ್ದರು.3ಆದರೆ ಯಾರನ್ನೂ ಕೊಂದಿರಲಿಲ್ಲ. ದಾವೀದನೂ ಅವನ ಜನರೂ ತಮ್ಮ ಊರಿಗೆ ಬಂದಾಗ ಅದು ಸುಡಲ್ಪಟ್ಟಿರುವುದನ್ನೂ, ತಮ್ಮ ಹೆಂಡತಿಯರೂ ಗಂಡುಮಕ್ಕಳೂ ಸೆರೆಯಾಗಿ ಒಯ್ಯಲ್ಪಟ್ಟಿರುವುದನ್ನೂ ಕಂಡು4ಅವರು ತಮ್ಮಿಂದಾಗುವಷ್ಟು ಕಾಲ ಅತ್ತರು.5ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನವಳಾದ ಅಹೀನೋವಮಳೂ, ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಹೋಗಿದ್ದರು.6ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು7ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, <<ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ>> ಎಂದು ಹೇಳಲು ಅವನು ತಂದನು.8ಆಗ ದಾವೀದನು ಯೆಹೋವನನ್ನು, <<ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?>> ಎಂದು ಕೇಳಲು ಆತನು, <<ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ>> ಎಂದು ಉತ್ತರಕೊಟ್ಟನು.9ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದ ಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು10ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದ್ದರಿಂದ, ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.11ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತನು ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿ,12ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿ ಗೊಂಚಲುಗಳನ್ನು ಕೊಟ್ಟರು. ಮೂರು ದಿನ ಹಗಲಿರುಳು ಅನ್ನಪಾನವಿಲ್ಲದೆ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು.13ಆಗ ದಾವೀದನು ಅವನನ್ನು, <<ನೀನು ಯಾರ ಕಡೆಯವನು, ಎಲ್ಲಿಯವನು?>> ಎಂದು ಕೇಳಿದನು. ಅವನು <<ನಾನು ಐಗುಪ್ತನು, ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡಿದ್ದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.14ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು>> ಎಂದು ಉತ್ತರ ಕೊಟ್ಟನು.15ಅನಂತರ ದಾವೀದನು, <<ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯೋ?>> ಎಂದು ಕೇಳಿದ್ದಕ್ಕೆ ಅವನು, <<ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು>> ಅಂದನು.16ಅವರು ಅಲ್ಲಿಗೆ ಹೋದಾಗ ಆ ಗುಂಪಿನವರು ತಮಗೆ ಫಿಲಿಷ್ಟಿಯ ಮತ್ತು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ ದೊಡ್ಡ ಕೊಳ್ಳೆಯ ನಿಮಿತ್ತವಾಗಿ ಸಂತೋಷಿಸಿ, ಉಂಡು ಕುಡಿದು, ಕುಣಿದಾಡುತ್ತಾ ಅಲ್ಲಿನ ಬೈಲಿನಲ್ಲಿ ವ್ಯಾಪಿಸಿಕೊಂಡಿದ್ದರು.17ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.18ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು.19ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ, ಗಂಡು ಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ ಎಲ್ಲವನ್ನೂ ತಿರುಗಿ ತೆಗೆದುಕೊಂಡು ಬಂದನು.20ಇದಲ್ಲದೆ ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, <<ಇವು ದಾವೀದನ ಕೊಳ್ಳೆ>> ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಮುಂದಾಗಿ ಹೊಡೆದುಕೊಂಡು ಬಂದರು.21ಅನಂತರ ದಾವೀದನು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ, ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಸಂಧಿಸಿ, ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದರು.22ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, <<ಇವರು ನಮ್ಮ ಸಂಗಡ ಬಾರದ್ದರಿಂದ, ನಾವು ತೆಗೆದುಕೊಂಡು ಬಂದಿರುವ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಹೆಂಡತಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ>> ಎಂದರು.23ಆಗ ದಾವೀದನು ಅವರಿಗೆ, <<ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು.24ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯುವವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು>> ಎಂದು ಉತ್ತರಕೊಟ್ಟನು.25ದಾವೀದನು ಇಸ್ರಾಯೇಲರಲ್ಲಿ ಇದನ್ನು ಕಟ್ಟಳೆಯಾಗಿ ನೇಮಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.26ದಾವೀದನು ಚಿಕ್ಲಗ್ ಊರಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ, <<ಇಗೋ ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ>> ಎಂದು ಹೇಳಿದನು.27ಬಹುಮಾನ ಹೊಂದಿದವರು ಯಾರೆಂದರೆ: ಬೇತೇಲಿನವರು, ದಕ್ಷಿಣ ಪ್ರಾಂತ್ಯದ ರಾಮೋತಿನವರು, ಯತ್ತೀರಿನವರು,28ಅರೋಯೇರಿನವರು ಸಿಪ್ಮೋತಿನವರು ಎಷ್ಟೆಮೋವದವರು,29ರಾಕಾಲಿನವರು, ಎರಹ್ಮೇಲ್ಯರು, ಕೇನ್ಯರು,30ಹೊರ್ಮದವರು, ಬೋರಾಷಾನಿನವರು, ಅತಾಕಿನವರು,31ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು ಇವರೇ.
31ಸೌಲನ ಮತ್ತು ಅವನ ಮಕ್ಕಳ ಮರಣ
1ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.2ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.3ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರನು ಅವನಿಗೆ ಗುರಿಯಿಟ್ಟನು.4ಆದುದರಿಂದ ಸೌಲನು ಬಹು ಭೀತನಾಗಿ ತನ್ನ ಆಯುಧವಾಹಕನಿಗೆ <<ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು. ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು, ಅಪಕೀರ್ತಿಯನ್ನು ಉಂಟುಮಾಡಾರು>> ಎಂದು ಹೇಳಲು ಅವನು ಹೆದರಿ, <<ನಾನು ಕೊಲ್ಲಲಾರೆ>> ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.5ಸೌಲನು ಮರಣ ಹೊಂದಿರುವುದನ್ನು ಅವನ ಆಯುಧವಾಹಕನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಅಲ್ಲಿಯೇ ಸತ್ತನು.6ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ, ಅವನ ಆಯುಧವಾಹಕನು, ಎಲ್ಲಾ ಆಳುಗಳೂ ಅದೇ ದಿನದಲ್ಲಿ ಸತ್ತರು.7ಇಸ್ರಾಯೇಲರ ಭಟರು ಸೋತುಹೋದರು. ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು.8ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ, ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡು9ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡನು. ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ, ತಮ್ಮ ಎಲ್ಲ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.10ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.11ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನ ಯಾಬೆಷ್ ಗಿಲ್ಯಾದಿನವರಿಗೆ ಮುಟ್ಟಿದಾಗ12ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.13ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿನ ಉಪವಾಸ ಮಾಡಿದರು.
2 ಸಮುವೇಲನು
1ಸೌಲನ ಯೋನಾತನರ ಮರಣದ ಸುದ್ದಿಯು ದಾವೀದನಿಗೆ ಮುಟ್ಟಿದ್ದು
1ಸೌಲನು ಸತ್ತನಂತರ, ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗ್ ಪಟ್ಟಣದಲ್ಲಿ ಎರಡು ದಿನ ಇದ್ದನು.2ಮೂರನೆಯ ದಿನದಲ್ಲಿ ಸೌಲನ ಠಾಣ್ಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.3ದಾವೀದನು ಅವನನ್ನು, <<ನೀನು ಎಲ್ಲಿಂದ ಬಂದಿ>> ಎಂದು ಕೇಳಲು ಅವನು, <<ನಾನು ಇಸ್ರಾಯೇಲರ ಠಾಣ್ಯದಿಂದ ತಪ್ಪಿಸಿಕೊಂಡು ಬಂದೆನು>> ಎಂದು ಉತ್ತರಕೊಟ್ಟನು.4ಆಗ ದಾವೀದನು, <<ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು>> ಅನ್ನಲು ಆ ಮನುಷ್ಯನು, <<ಇಸ್ರಾಯೇಲರು ರಣರಂಗದಿಂದ ಓಡಿಹೋದರು. ಅನೇಕರು ಗಾಯಗೊಂಡು ಸತ್ತುಹೋದರು. ಸೌಲನೂ ಅವನ ಮಗನಾದ ಯೋನಾತಾನನೂ ಮರಣಹೊಂದಿದರು>> ಎಂದು ತಿಳಿಸಿದನು.5ದಾವೀದನು ಈ ವರ್ತಮಾನ ತಂದ ಆ ಪ್ರಾಯಸ್ಥನಿಗೆ <<ಸೌಲನೂ ಅವನ ಮಗನಾದ ಯೋನಾತಾನನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು>> ಎಂದು ಪ್ರಶ್ನಿಸಲು ಅವನು,6<<ನಾನು ಆಕಸ್ಮಿಕವಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು.7ಅವನು ತಿರುಗಿಕೊಂಡು ನನ್ನನ್ನು ನೋಡಿ ಕರೆದನು.8ನಾನು, <ಇಗೋ ಬಂದೆನು> ಎಂದು ಹೇಳಿ ಹೋದಾಗ ಅವನು <ನೀನಾರು?> ಎಂದು ಕೇಳಿದ್ದಕ್ಕೆ, <ನಾನು ಅಮಾಲೇಕ್ಯನು> ಎಂದು ಉತ್ತರಕೊಟ್ಟೆನು.9ಆಗ ಅವನು ನನಗೆ, <ನೀನು ದಯೆಮಾಡಿ ಹತ್ತಿರ ಬಂದು ನನ್ನನ್ನು ಕೊಂದು ಹಾಕು. ಯಾಕೆಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವುದರಿಂದ ನನಗೆ ಸಂಕಟ ಹಿಡಿದದೆ> ಎಂದು ಹೇಳಿದನು.10ನಾನು ಹತ್ತಿರ ಹೋಗಿ ಅವನು ಬಿದ್ದನಂತರ ಬದುಕಲಾರನೆಂದು ನೆನಸಿ, ಅವನನ್ನು ಕೊಂದು ಹಾಕಿ, ಅವನ ತಲೆಯ ಮೇಲಣ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ>> ಅಂದನು.11ಸೌಲನೂ ಅವನ ಮಗನಾದ ಯೋನಾತಾನನೂ, ಯೆಹೋವನ ಪ್ರಜೆಗಳಾದ ಇಸ್ರಾಯೇಲರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ ದಾವೀದನೂ ಅವನ ಜನರೂ12ತಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಳಾಡಿ, ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು.13ದಾವೀದನು ವರ್ತಮಾನ ತಂದ ಯುವಕನನ್ನು, <<ನೀನು ಎಲ್ಲಿಯವನು?>> ಎಂದು ಕೇಳಿದನು. ಅವನು, <<ನಾನು ಇಸ್ರಾಯೇಲರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನು>> ಎಂದು ಉತ್ತರಕೊಟ್ಟನು.14ದಾವೀದನು ಅವನಿಗೆ, <<ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?>> ಎಂದು ಹೇಳಿ15ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು, <<ಹೋಗಿ ಇವನನ್ನು ಕೊಂದುಹಾಕು>> ಎಂದು ಆಜ್ಞಾಪಿಸಲು ಅವನು ಅಮಾಲೇಕ್ಯನನ್ನು ಹೊಡೆದು ಕೊಂದನು.16ದಾವೀದನು, <<ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು>> ಅಂದನು.ದಾವೀದನು ಸೌಲಯೋನಾತಾನರನ್ನು ಕುರಿತು ರಚಿಸಿದ ಶೋಕಗೀತೆ
17ದಾವೀದನು ಸೌಲ ಯೋನಾತನರ ಕುರಿತು ಒಂದು ಶೋಕಗೀತೆಯನ್ನು ರಚಿಸಿ,18ಬಿಲ್ಲೆ ಎಂಬ ಈ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಆ ಗೀತವು ಯಾಷಾರ್ ಗ್ರಂಥದಲ್ಲಿ ಬರೆದಿರುತ್ತದೆ.
19<<ಇಸ್ರಾಯೇಲರೇ, ನಿಮ್ಮ ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣು ಪಾಲಾಗಿ ಹೋಯಿತು. ಅಯ್ಯೋ ಪರಾಕ್ರಮಶಾಲಿಗಳೇ, ನೀವು ಹೇಗೆ ಹತರಾದಿರಿ.
20ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟಾರು. 21ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.
22ಯೋನಾತಾನನ ಬಿಲ್ಲು ಹತರಾದವರ ರಕ್ತವನ್ನು ಹೀರದೆಯೂ ಪರಾಕ್ರಮಶಾಲಿಗಳ ಕೊಬ್ಬನ್ನು ರುಚಿಸದೆಯೂ ಬರುತ್ತಿರಲಿಲ್ಲ. ಸೌಲನ ಕತ್ತಿಯು ವ್ಯರ್ಥವಾಗಿ ಹಿಂದಿರುಗುತ್ತಿರಲಿಲ್ಲ. 23ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.
24ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ, ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ, ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ? 25ಅಯ್ಯೋ ಪರಾಕ್ರಮಶಾಲಿಗಳೇ, ಯುದ್ಧದಲ್ಲಿ ಹೇಗೆ ಮರಣ ಹೊಂದಿದಿರಿ. ಯೋನಾತಾನನು ನಿಮ್ಮ ಬೆಟ್ಟದಲ್ಲಿ ಹತನಾಗಿ ಬಿದ್ದನಲ್ಲಾ
26ಯೋನಾತಾನನೇ, ನನ್ನ ಸಹೋದರನೇ ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ. ನೀನು ನನಗೆ ಮನೋಹರನಾಗಿದ್ದಿ. ನನ್ನ ಮೇಲಿನ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದು. ಅದು ಸತಿ ಪ್ರೇಮಕ್ಕಿಂತ ಶ್ರೇಷ್ಠವಾದದ್ದು.
27ಅಯ್ಯೋ ಪರಾಕ್ರಮಶಾಲಿಗಳು ಹೇಗೆ ಹತರಾದರು, ಯುದ್ಧದ ಆಯುಧಗಳು ಹೇಗೆ ಹಾಳಾದವು.>>
2ದಾವೀದನಿಗೆ ಯೆಹೂದ್ಯರ ಅರಸನಾಗಿ ರಾಜಾಭಿಷೇಕವಾದದ್ದು
1ಅನಂತರ ದಾವೀದನು ಯೆಹೋವನನ್ನು, <<ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?>> ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, <<ಯಾವ ಊರಿಗೆ ಹೋಗಲಿ?>> ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು.2ಆಗ ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳನ್ನೂ ಕರೆದುಕೊಂಡು ಅಲ್ಲಿಗೆ ಹೋದನು.3ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಮಾಡಿದರು.4ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.5ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, <<ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ.6ಯೆಹೋವನ ಒಡಂಬಡಿಕೆಯ ನಂಬಿಕೆ ಮತ್ತು ಸತ್ಯ ನಿಮ್ಮೊಂದಿಗಿರಲಿ. ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.7ಯೆಹೂದ್ಯರು ನನ್ನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ನಿಮ್ಮ ಅರಸನಾದ ಸೌಲನು ಸತ್ತುಹೋದರೂ ನೀವು ಶೂರರಾಗಿರಿ, ನಿಮ್ಮ ಕೈಗಳು ಜೋಲುಬೀಳದಿರಲಿ>> ಎಂದು ಹೇಳಿ ಕಳುಹಿಸಿದನು.ಈಷ್ಬೋಶೆತನು ಇಸ್ರಾಯೇಲಿನಲ್ಲಿ ಅರಸನಾದದ್ದು
8ಸೌಲನ ಸೇನಾಧಿಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿಮಿಗೆ ಕರೆದುಕೊಂಡು ಹೋಗಿ9ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ, ಎಫ್ರಾಯೀಮ್, ಬೆನ್ಯಾಮೀನ ಜನರಿಗೂ ಬೇರೆ ಎಲ್ಲಾ ಇಸ್ರಾಯೇಲರಿಗೂ ಅರಸನನ್ನಾಗಿ ಮಾಡಿದನು.10ಸೌಲನ ಮಗನಾದ ಈಷ್ಬೋಶೆತನು ನಲ್ವತ್ತು ವರ್ಷದವನಾದಾಗ ಇಸ್ರಾಯೇಲರನ್ನು ಆಳತೊಡಗಿ ಎರಡು ವರ್ಷ ರಾಜ್ಯಭಾರ ಮಾಡಿದನು. ಯೆಹೂದ್ಯರು ಮಾತ್ರ ದಾವೀದನನ್ನು ಹಿಂಬಾಲಿಸಿದರು.11ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದದ್ದು ಏಳು ವರ್ಷ ಆರು ತಿಂಗಳುಗಳು.ಇಸ್ರಾಯೇಲ್ ಮತ್ತು ಯೆಹೂದ್ಯರ ನಡುವೆ ಯುದ್ಧ
12ಒಂದು ದಿನ ನೇರನ ಮಗನಾದ ಅಬ್ನೇರನೂ, ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.13ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು.14ಆಗ ಅಬ್ನೇರನು ಯೋವಾಬನಿಗೆ, <<ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ>> ಎಂದು ಹೇಳಲು ಯೋವಾಬನು, <<ಆಗಲಿ>> ಅಂದನು.15ಆಗ ಸೌಲನ ಮಗನಾದ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಸಮಸಂಖ್ಯೆಯಾಗಿ ಹೊರಟು ಬಂದರು.16ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆಹಿಡಿದು, ಕತ್ತಿಯಿಂದ ಪಕ್ಕೆಯಲ್ಲಿ ತಿವಿದಿದ್ದರಿಂದ ಎಲ್ಲರೂ ಸತ್ತು ಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ << ಹೆಲ್ಕಾತ್ ಹಸ್ಸೂರಿಂ>> ಎಂದು ಹೆಸರಾಯಿತು.17ಅನಂತರ ಆ ದಿನ ಘೋರ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು.ಅಸಾಹೇಲನ ಮರಣ
18ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.19ಇವನು ಎಡಕ್ಕಾದರೂ ಬಲಕ್ಕಾದರೂ ತಿರುಗದೇ ಅಬ್ನೇರನನ್ನು ಹಿಂದಟ್ಟಿದನು.20ಅಬ್ನೇರನು ಹಿಂತಿರುಗಿ ನೋಡಿ, <<ನೀನು ಅಸಾಹೇಲನೋ?>> ಎಂದು ಕೇಳಿದ್ದಕ್ಕೆ ಅವನು ಹೌದೆಂದು ಉತ್ತರಕೊಟ್ಟನು.21ಆಗ ಅಬ್ನೇರನು ಅವನಿಗೆ, <<ನನ್ನನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಿಕೊಂಡು ಯುವಕರಲ್ಲೊಬ್ಬನನ್ನು ಹಿಡಿದು ಸುಲಿದುಕೋ>> ಎಂದು ಹೇಳಿದನು. ಆದರೆ ಅಸಾಹೇಲನು ಒಪ್ಪಲಿಲ್ಲ.22ಅಬ್ನೇರನು ತಿರುಗಿ ಅಸಾಹೇಲನಿಗೆ, <<ನನ್ನನ್ನು ಬಿಟ್ಟು ಹೋಗು, ನಾನೇಕೆ ನಿನ್ನನ್ನು ನೆಲಕ್ಕುರುಳಿಸಬೇಕು? ಹಾಗೆ ಮಾಡಿದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ>> ಅಂದನು.23ಅಸಾಹೇಲನು ಬಿಟ್ಟು ಹೋಗುವುದಕ್ಕೆ ಒಪ್ಪದ ಕಾರಣ ಅಬ್ನೇರನು ಬರ್ಜಿಯನ್ನು ಹಿಂದಿನಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಹೊರಗೆ ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತು ಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.24ಆದರೆ ಯೋವಾಬನೂ, ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು <<ಅಮ್ಮಾ>> ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮಾನವಾಯಿತು. ಆ ಗುಡ್ಡವು ಗಿಬ್ಯೋನಿನ ಅರಣ್ಯ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿರುತ್ತದೆ.25ಬೆನ್ಯಾಮೀನ್ಯರು ಒಂದೇ ಗುಂಪಾಗಿ ಕೂಡಿಕೊಂಡು ಅಬ್ನೇರನ ಬಳಿಗೆ ಬಂದು ಗುಡ್ಡದ ಮೇಲೆ ನಿಂತರು.26ಆಗ ಅಬ್ನೇರನು, <<ಯೋವಾಬನನ್ನು ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ>> ಎಂದನು.27ಅದಕ್ಕೆ ಯೋವಾಬನು, <<ದೇವರ ಜೀವದಾಣೆ, ಈಗ ನೀನು ಈ ಮಾತುಗಳನ್ನು ಹೇಳದಿದ್ದರೆ ಜನರು ನಾಳೆ ಬೆಳಗಾಗುವವರೆಗೆ ತಮ್ಮ ಬಂಧುಗಳನ್ನು ಹಿಂದಟ್ಟದೆ ಬಿಡುವುದಿಲ್ಲ>> ಎಂದು ಉತ್ತರಕೊಟ್ಟು ಕೂಡಲೇ ತುತ್ತೂರಿಯನ್ನು ಊದಿಸಿದನು.28ಆಗ ಅವರು ಇಸ್ರಾಯೇಲ್ಯರನ್ನು ಹಿಂದಟ್ಟದೆ ಬಿಟ್ಟಿದ್ದರಿಂದ ಯುದ್ಧವು ನಿಂತುಹೋಯಿತು.29ಅಬ್ನೇರನೂ ಅವನ ಜನರೂ ಅರಾಬಾ ತಗ್ಗಿನಲ್ಲಿ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಯೊರ್ದನ್ ಹೊಳೆದಾಟಿ, ಬಿಥ್ರೋನ ಕಣಿವೆಯನ್ನು ಹಾದು, ಮಹನಯಿಮಿಗೆ ಸೇರಿದರು.30ಯೋವಾಬನು ಅಬ್ನೇರನನ್ನು ಹಿಂದಟ್ಟದೆ ಬಿಟ್ಟು, ಹಿಂದಿರುಗಿ ಬಂದು, ಜನರನ್ನು ಸೇರಿಸಿ ಲೆಕ್ಕಮಾಡಿದಾಗ ಅವರಲ್ಲಿ ದಾವೀದನ ಹತ್ತೊಂಬತ್ತು ಮಂದಿ ಸೈನಿಕರೂ ಅಸಾಹೇಲನೂ ಇರಲಿಲ್ಲ.31ಆದರೆ ದಾವೀದನ ಸೈನಿಕರು ಅಬ್ನೇರನ ಜನರಾಗಿರುವ ಬೆನ್ಯಾಮೀನ್ಯರಲ್ಲಿ ಮುನ್ನೂರ ಅರವತ್ತು ಮಂದಿಯನ್ನು ಕೊಂದಿದ್ದರು.32ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು.
31ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.ದಾವೀದನ ಮಕ್ಕಳು
2ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು; ಚೊಚ್ಚಲ ಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು.3ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.4ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು. ಐದನೆಯವನು ಶೆಫಟ್ಯನು, ಇವನು ಅಬೀಟಲಳ ಮಗನು.5ಆರನೆಯವನು ಇತ್ರಾಮನು. ಇವನು ದಾವೀದನಿಗೆ ಅವನ ಹೆಂಡತಿಯಾದ ಎಗ್ಲಳಲ್ಲಿ ಹುಟ್ಟಿದವನು. ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಇವರೇ.ಅಬ್ನೇರನು ದಾವೀದನ ಪಕ್ಷಕ್ಕೆ ಸೇರಿದ್ದು
6ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧ ನಡೆಯುತ್ತಿರುವಾಗ ಸೌಲನ ವಂಶದವರಲ್ಲಿ ಅಬ್ನೇರನೇ ಬಲಿಷ್ಠನಾಗಿದ್ದನು.7ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, <<ನೀನು ನನ್ನ ತಂದೆಯ ಉಪಪತ್ನಿಯರನ್ನು ಕೂಡಿದ್ದೇಕೆ?>> ಎಂದು ಕೇಳಿದನು.8ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, <<ಈ ವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ಮಿತ್ರರಿಗೂ ದಯೆತೋರಿಸುತ್ತಿದ್ದೇನಲ್ಲಾ. ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಈ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?9ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,10ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆ ಹೋದರೆ, ಆತನು ನನಗೆ ಬೇಕಾದದ್ದನ್ನು ಮಾಡಲಿ>> ಅಂದನು.11ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರಕೊಡಲಾರದೆ ಹೋದನು.12ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಪ್ರಯತ್ನದಲ್ಲಿ ನಾನು ನಿನ್ನ ಸಂಗಡ ಕೈಜೋಡಿಸುತ್ತೇನೆ>> ಎಂದು ಹೇಳಿಸಿದನು.13ಅದಕ್ಕೆ ದಾವೀದನು, <<ಒಳ್ಳೆಯದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ಆದರೆ ನಿನ್ನಿಂದ ನನಗೆ ಒಂದು ಸಹಾಯ ಬೇಕು. ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ, ನೀನು ನನ್ನ ಮುಖವನ್ನು ನೋಡಕೂಡದು>> ಎಂದು ಉತ್ತರಕೊಟ್ಟನು.14ಆಗ ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು>> ಎಂಬುದಾಗಿ ಆಜ್ಞಾಪಿಸಿದನು.15ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ಕರೆಯಿಸಿದನು.16ಆಗ ಪಲ್ಟೀಯೇಲನು ಬಹುರೀಮಿನವರೆಗೆ ಅಳುತ್ತಾ ಆಕೆಯ ಹಿಂದೆ ಹೋದನು. ಅನಂತರ ಅಬ್ನೇರನು ಅವನಿಗೆ, <<ಹಿಂದಿರುಗಿ ಮನೆಗೆ ಹೋಗು>> ಎಂದು ಹೇಳಲು ಅವನು ಹಿಂದಿರುಗಿ ಹೋದನು.17ಅಬ್ನೇರನು ಇಸ್ರಾಯೇಲರ ಹಿರಿಯರಿಗೆ, <<ದಾವೀದನು ನಮ್ಮ ಅರಸನಾಗಬೇಕೆಂದು ನೀವು ಮೊದಲು ಅಪೇಕ್ಷಿಸಿದಂತೆಯೇ ಈಗ ಮಾಡಿರಿ.18ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ>> ಎಂದು ಹೇಳಿದನು.19ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು ಇಸ್ರಾಯೇಲರೂ ಬೆನ್ಯಾಮೀನ್ಯರೆಲ್ಲರೂ ಒಪ್ಪಿಕೊಂಡು ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕೋಸ್ಕರ ಹೆಬ್ರೋನಿಗೆ ಹೊರಟನು.20ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣ ಮಾಡಿಸಿದನು.21ಅಬ್ನೇರನು ದಾವೀದನಿಗೆ, <<ನಾನು ಹೊರಟುಹೋಗಿ ಇಸ್ರಾಯೇಲರನ್ನೆಲ್ಲಾ ಕೂಡಿಸಿ, ನನ್ನ ಒಡೆಯನಾದ ಅರಸನ ಬಳಿಗೆ ಕರೆದುಕೊಂಡು ಬರುವೆನು. ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು. ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು>> ಎಂದು ಹೇಳಲು ದಾವೀದನು ಅವನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು.ಅಬ್ನೇರನ ಹತ್ಯೆ
22ಸುಲಿಗೆ ಮಾಡುವುದಕ್ಕಾಗಿ ಹೋಗಿದ್ದ ದಾವೀದನ ಭಟರು ಯೋವಾಬನೂ ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂತಿರುಗಿ ಬಂದರು. ಅವನು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು.23ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ, ಅರಸನು ಅವನನ್ನು ಸುರಕ್ಷಿತವಾಗಿ ಕಳುಹಿಸಿದನೆಂದೂ ತಿಳಿದು, ಅರಸನ ಬಳಿಗೆ ಹೋಗಿ,24<<ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ. ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದೇಕೆ?25ನೇರನ ಮಗನಾದ ಅಬ್ನೇರನ ಸಂಗತಿ ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವುದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೇ>> ಎಂದು ಹೇಳಿ,26ಯೋವಾಬನು ದಾವೀದನನ್ನು ಬಿಟ್ಟು, ಹೊರಗೆ ಹೋಗಿ, ಅಬ್ನೇರನನ್ನು ಕರೆತರುವಂತೆ ದೂತರನ್ನು ಕಳುಹಿಸಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ.27ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.28ಸ್ವಲ್ಪ ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಿಗೆ ಮುಟ್ಟಿತು. ಆಗ ಅವನು, <<ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ, ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.29ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ>> ಅಂದನು.30ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ಸಾಯಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.ದಾವೀದನು ಅಬ್ನೇರನಿಗಾಗಿ ಶೋಕಿಸಿದ್ದು
31ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, <<ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ>> ಎಂದು ಆಜ್ಞಾಪಿಸಿ ತಾನು ಶವಯಾತ್ರೆ ಹಿಂದೆ ಹೋದನು.32ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು. ಜನರೆಲ್ಲರೂ ಅತ್ತರು.33ದಾವೀದನು ಅಬ್ನೇರನನ್ನು ಕುರಿತು,<<ಅಬ್ನೇರನೇ ನಿನಗೆ ಮೂರ್ಖರಿಗಾಗುವಂತೆ ದುರ್ಮರಣವಾಯಿತೋ?
34ನಿನ್ನ ಕೈಗಳು ಕಟ್ಟಲ್ಪಡಲಿಲ್ಲ. ನಿನ್ನ ಕಾಲುಗಳಿಗೆ ಬೇಡಿಗಳು ಹಾಕಿರಲಿಲ್ಲ.ನೀನು ದುಷ್ಟರಿಂದ ಹತನಾದಂತೆ ಹತನಾದಿ>>
ಎಂದು ಶೋಕಗೀತೆಯನ್ನು ಹಾಡಲು ಜನರು ತಿರುಗಿ ಅತ್ತರು.
35ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, <<ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ>> ಎಂದು ಆಣೆಯಿಟ್ಟು ಹೇಳಿದನು.36ಜನರು ಇದನ್ನು ಕಂಡು ಮೆಚ್ಚಿದರು. ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.37ನೇರನ ಮಗನಾದ ಅಬ್ನೇರನ ಕೊಲೆಯಲ್ಲಿ ಅರಸನು ಕೈಹಾಕಲಿಲ್ಲವೆಂಬುದು ಅವನ ಎಲ್ಲಾ ಜನರಿಗೂ ಇಸ್ರಾಯೇಲರಿಗೂ ಅದೇ ದಿನ ಗೊತ್ತಾಯಿತು.38ಅರಸನು ತನ್ನ ಸೇವಕರಿಗೆ, <<ಈ ದಿನ ಇಸ್ರಾಯೇಲರಲ್ಲಿ ಹತವಾದವನು, ಪ್ರಭುವೂ, ಮಹಾಪುರುಷನೂ ಆಗಿದ್ದಾನೆಂಬುದು ನಿಮಗೆ ಗೊತ್ತಿದೆಯಲ್ಲಾ.39ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ>> ಎಂದು ಹೇಳಿದನು. 4ಈಷ್ಬೋಶೆತನು ಕೊಲ್ಲಲ್ಪಟ್ಟದ್ದು
1ಅಬ್ನೇರನು ಹೆಬ್ರೋನಿನಲ್ಲಿ ಸತ್ತನೆಂಬ ವರ್ತಮಾನವು ಸೌಲನ ಮಗನಾದ ಈಷ್ಬೋಶೆತನಿಗೆ ಮುಟ್ಟಿದಾಗ ಅವನ ಕೈಗಳು ಜೋಲುಬಿದ್ದವು. ಇಸ್ರಾಯೇಲರೆಲ್ಲರು ಕಳವಳಗೊಂಡರು.2ಸೌಲನ ಮಗನಿಗೆ ಬಾಣ, ರೇಕಾಬ ಎಂಬ ಇಬ್ಬರು ಸೇನಾಧಿಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. ಬೇರೋತ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ.3ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ, ಇಂದಿನ ವರೆಗೂ ಅಲ್ಲೇ ಪ್ರವಾಸಿಗಳಾಗಿದ್ದಾರೆ.4ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾಗಿದ್ದು ಹೇಗೆಂದರೆ, ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ, ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು.5ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬುವರು ಅವನ ಮನೆಯ ಬಳಿಗೆ ಬಂದರು.6ಆಗ ಬಾಗಿಲು ಕಾಯುವವಳು ಗೋದಿ ಕೇರುತ್ತಿದ್ದು ಹಾಗೆಯೇ ತೂಕಡಿಸಿ ನಿದ್ದೆಮಾಡುತ್ತಿರುವುದನ್ನು ಬಾಣ ಮತ್ತು ರೇಕಾಬರು ಕಂಡು ರಹಸ್ಯವಾಗಿ ಒಳಗೆ ಜಾರಿಕೊಂಡರು.7ಅವರು ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದು, ಕೊಂದುಹಾಕಿ, ತಲೆಯನ್ನು ಕತ್ತರಿಸಿ, ಅದನ್ನು ತೆಗೆದುಕೊಂಡು, ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ,8ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು, ಆ ತಲೆಯನ್ನು ಅವನಿಗೆ ತೋರಿಸಿ, <<ಇಗೋ ನಿನ್ನ ಜೀವತೆಗೆಯಬೇಕೆಂದಿದ್ದ ನಿನ್ನ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ. ಅರಸನಾದ ನಮ್ಮ ಒಡೆಯನಿಗಾಗಿ ಸೌಲನಿಗೂ ಅವನ ಸಂತಾನಕ್ಕೂ ಯೆಹೋವನು ಈ ಹೊತ್ತು ಮುಯ್ಯಿ ತೀರಿಸಿದ್ದಾನೆ>> ಅಂದನು.9ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣರಿಗೆ,10<<ಸೌಲನ ಮರಣವಾರ್ತೆಯನ್ನು ತಿಳಿಸುವುದು ಶುಭಕರವೆಂದು ಭಾವಿಸಿ ಬಂದು, ನನಗೆ ಹೇಳಿದವನನ್ನು ಹಿಡಿದು ಅವನಿಗೆ ಚಿಕ್ಲಗಿನಲ್ಲಿ ಮರಣದಂಡನೆಯೆಂಬ ಬಹುಮಾನವನ್ನು ಸಲ್ಲಿಸಿದೆನಲ್ಲವೋ?11ಮಹಾ ದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು>> ಎಂದು ಹೇಳಿ,12ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು, ಕೈಕಾಲುಗಳನ್ನು ಕತ್ತರಿಸಿ, ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.
5ದಾವೀದನನ್ನು ಇಸ್ರಾಯೇಲರೆಲ್ಲರ ಮೇಲೆ ಅರಸನಾದದ್ದು
1ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, <<ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,2ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, <ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ> >> ಅಂದರು.3ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.4ದಾವೀದನು ಮೂವತ್ತು ವರ್ಷದವನಾದಾಗ ಅರಸನಾಗಿ, ನಲ್ವತ್ತು ವರ್ಷ ಆಳಿದನು.5ಅವನು ಹೆಬ್ರೋನಿನಲ್ಲಿದ್ದು ಯೆಹೂದ ಕುಲವೊಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು. ಯೆರೂಸಲೇಮಿನಲ್ಲಿದ್ದು ಯೆಹೂದ್ಯರನ್ನು ಮತ್ತು ಎಲ್ಲಾ ಇಸ್ರಾಯೇಲರನ್ನು ಆಳಿದ್ದು ಮೂವತ್ತು ಮೂರು ವರ್ಷಗಳು.6ದಾವೀದನು ತನ್ನ ಜನರನ್ನು ಕರೆದುಕೊಂಡು ಯೆರೂಸಲೇಮಿನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರುವುದಿಲ್ಲವೆಂದು ತಿಳಿದು ದಾವೀದನಿಗೆ, <<ನೀನು ಒಳಗೆ ಬರಲಾರೆ, ಕುರುಡರು ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು>> ಎಂದು ಹೇಳಿದರು.7ಅದರೂ ದಾವೀದನು ದಾವೀದನಗರ ಎನ್ನಿಸಿಕೊಳ್ಳುವ ಚೀಯೋನಿನ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.8ಆ ದಿನ ದಾವೀದನು, <<ಯೆಬೂಸಿಯರನ್ನು ಜಯಿಸಬೇಕೆಂದಿರುವವನು, ಜಲದ್ವಾರದ ಮೂಲಕ ಹತ್ತಿ ಹೋಗಿ, ನನ್ನನ್ನು ದ್ವೇಷಿಸುವ ಕುರುಡರನ್ನು ಮತ್ತು ಕುಂಟರನ್ನು ಕಂದಕದಲ್ಲಿ ನಾಶಪಡಿಸಬೇಕು>> ಎಂದು ಹೇಳಿದನು. ಆದುದರಿಂದ <<ಕುರುಡರೂ ಕುಂಟರೂ ಅರಮನೆಯ ಒಳಗೆ ಬರಲಾಗದು>> ಎಂಬ ಗಾದೆಯುಂಟು.ದಾವೀದನು ಯೆರೂಸಲೇಮನ್ನು ವಶಪಡಿಸಿಕೊಂಡದ್ದು
9ದಾವೀದನು ಆ ಕೋಟೆಗೆ ದಾವೀದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.10ಸೇನಾಧೀಶ್ವರನಾದ ಯೆಹೋವ ದೇವರು ಅವನ ಸಂಗಡ ಇದ್ದುದರಿಂದ ಅವನು ಆಧಿಕ ಪ್ರಬಲಗೊಳ್ಳುತ್ತಾ ಬಂದನು.11ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.12ಇದರಿಂದ ದಾವೀದನು, <<ಯೆಹೋವನು ನನ್ನನ್ನು ಇಸ್ರಾಯೇಲರ ರಾಜನನ್ನಾಗಿ ಸ್ಥಿರಪಡಿಸಿ, ತನ್ನ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದ್ದಾನೆ>> ಎಂದು ತಿಳಿದುಕೊಂಡನು.13ದಾವೀದನು ಹೆಬ್ರೋನಿನಿಂದ ಯೆರೂಸಲೇಮಿಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಮತ್ತು ಉಪಪತ್ನಿಯರನ್ನಾಗಿಯೂ ಮಾಡಿಕೊಂಡಿದ್ದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳು ಹುಟ್ಟಿದರು.14ಅಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,15ಇಬ್ಹಾರ್, ಎಲೀಷೂವ, ನೆಫೆಗ್, ಯಾಫೀಯ,16ಎಲೀಷಾಮ, ಎಲ್ಯಾದ ಮತ್ತು ಎಲೀಫೆಲೆಟ್.ದಾವೀದನು ಫಿಲಿಷ್ಟಿಯರನ್ನು ಎರಡು ಸಾರಿ ಸೋಲಿಸಿದ್ದು
17ಇಸ್ರಾಯೇಲರು ದಾವೀದನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ತಲುಪಿದಾಗ ಅವರು ಅವನನ್ನು ಸೆರೆಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.18ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡಿದ್ದರು.19ಅದನ್ನು ತಿಳಿದು ದಾವೀದನು ಯೆಹೋವನನ್ನು, <<ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?>> ಎಂದು ಕೇಳಿದನು. ಅದಕ್ಕೆ ಯೆಹೋವನು, <<ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು>> ಎಂದು ಉತ್ತರಕೊಟ್ಟನು.20ಆಗ ಅವನು ಹೋಗಿ ಅವರನ್ನು ಸೋಲಿಸಿ, <<ಯೆಹೋವನು ಕಟ್ಟೆ ಒಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು, ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆ>> ಎಂದು ಹೇಳಿ ಆ ಯುದ್ಧ ಸ್ಥಳಕ್ಕೆ << ಬಾಳ್ ಪೆರಾಚೀಮ್>> ಎಂದು ಹೆಸರಿಟ್ಟನು.21ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.22ಫಿಲಿಷ್ಟಿಯರು ಇನ್ನೊಮ್ಮೆ ಹೊರಟು ಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.23ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ, <<ನೀನು ನೇರವಾಗಿ ಹೋಗಿ ಅವರನ್ನು ಮುತ್ತಿಗೆ ಹಾಕಬೇಡ. ಅವರಿಗೆ ತಿಳಿಯದಂತೆ ಸುತ್ತಿಕೊಂಡು ಹೋಗಿ ಹಿಂಬಾಲಿಸಿ, ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.24ಆ ಬಾಕಾ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದು ಅವರ ಮೇಲೆ ದಾಳಿಮಾಡು>> ಎಂದನು.25ದಾವೀದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ, ಫಿಲಿಷ್ಟಿಯರನ್ನು ಗೆಬದಿಂದ ಗೆಜೆರಿನವರೆಗೂ ಸಂಹರಿಸಿದನು.
6ದಾವೀದನು ಯೆಹೋವನ ಮಂಜೂಷವನ್ನು ಯೆರೂಸಲೇಮಿಗೆ ತಂದದ್ದು
1ಅನಂತರ ದಾವೀದನು ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು ಅವರ ಸಂಗಡ2ದೇವರ ಮಂಜೂಷವನ್ನು ತರುವುದಕ್ಕಾಗಿ ಯೆಹೂದ ದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾಗಿತ್ತು.3ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು, ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಮಾರ್ಗ ತೋರಿಸುತ್ತಾ ಮುನ್ನಡೆಸಿದರು.4ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲ್ಪಟ್ಟ ದೇವರ ಮಂಜೂಷದ ಮುಂದೆ ಅಹಿಯೋವನೂ ಹೋಗುತ್ತಿದ್ದನು.5ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು.6ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.7ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.8ಯೆಹೋವನು ಉಜ್ಜನನ್ನು ಹತ್ಯಮಾಡಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ <<ಪೆರೆಚ್ ಉಜ್ಜಾ>> ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಅದೇ ಹೆಸರಿರುತ್ತದೆ.9ಆ ದಿನ ದಾವೀದನು ಯೆಹೋವನಿಗೆ ಭಯಪಟ್ಟು, <<ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?>> ಎಂದುಕೊಂಡು,10ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.11ಯೆಹೋವನ ಮಂಜೂಷವು ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ದಿನಗಳಲ್ಲಿ ಯೆಹೋವನು ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದನು.12ಯೆಹೋವನು ಹೀಗೆ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ, ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸಾಹದಿಂದ ದಾವೀದನಗರಕ್ಕೆ ತಂದನು.13ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ, ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು.14ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.15ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲರೂ ಅರ್ಭಟಿಸುತ್ತಾ, ತುತ್ತೂರಿ ಊದುತ್ತಾ, ಯೆಹೋವನ ಮಂಜೂಷವನ್ನು ತಂದರು.16ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು17ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.18ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.19ಸಭೆಯಾಗಿ ಸೇರಿ ಬಂದಿರುವ ಇಸ್ರಾಯೇಲರ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನೂ ಮತ್ತು ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಕೊಡಿಸಿದರು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.20ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, <<ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ>> ಅಂದಳು.21ಆಗ ದಾವೀದನು ಮೀಕಲಳಿಗೆ, <<ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು.22ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರ ಹೊಂದುವುದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು>> ಎಂದನು.23ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವ ವರೆಗೂ ಮಕ್ಕಳೇ ಆಗಲಿಲ್ಲ.
7ಯೆಹೋವನು ದಾವೀದನಿಗೆ ವಾಗ್ದಾನಮಾಡಿದ್ದು
1ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು.2ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, <<ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ>> ಎಂದು ಹೇಳಿದನು.3ನಾತಾನನು ಅರಸನಿಗೆ, <<ಆಗಲಿ, ನಿನ್ನ ಹೃದಯದ ಆಲೋಚನೆಯಂತೆ ಮಾಡು. ಯೆಹೋವನು ನಿನ್ನ ಸಂಗಡ ಇರುತ್ತಾನೆ>> ಅಂದನು.4ಅದೇ ರಾತ್ರಿಯಲ್ಲಿ ನಾತಾನನಿಗೆ ಯೆಹೋವನ ಮಾತು ಕೇಳಿ ಬಂತು.5ಯೆಹೋವನು, <<ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ <ನೀನು ನನಗೋಸ್ಕರ ಮನೆಯನ್ನು ಕಟ್ಟಬೇಕೋ?6ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು.7ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?> ಎಂಬುದಾಗಿ ಯೆಹೋವನು ಅನ್ನುತ್ತಾನೆ>> ಎಂದು ಹೇಳು.8ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, <<ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, <ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.9ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾ ಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಉನ್ನತಿಗೆ ತರುವೆನು.10ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.11ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದ ಇಲ್ಲಿಯವರೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನೀನು ಶತ್ರುಭಯವಿಲ್ಲದೆ ನೆಮ್ಮದಿಯಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.12ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.13ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.14ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು.15ಆದರೂ ನನ್ನ ನಿಷ್ಠೆಯ ಒಡಂಬಡಿಕೆಯು ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ16ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು> >> ಎಂದು17ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.ದಾವೀದನ ಕೃತಜ್ಞತಾ ಪ್ರಾರ್ಥನೆ
18ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, <<ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ.19ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ.20ಕರ್ತನೇ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ. ನಾನು ಇನ್ನೇನು ಹೇಳಲಿ?21ನೀನು ನಿನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೋಸ್ಕರ, ನಿನ್ನ ಇಷ್ಟಾನುಸಾರವಾಗಿ ಈ ಎಲ್ಲಾ ಮಹತ್ಕಾರ್ಯಗಳನ್ನು ನಡಿಸಿ, ಅವುಗಳ ಅನುಭವಗಳನ್ನು ನಿನ್ನ ಸೇವಕನಿಗೆ ಉಂಟುಮಾಡದ್ದೀ.22ದೇವರೇ, ಯೆಹೋವನೇ! ನೀನೇ ಮಹೋನ್ನತನು. ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ನೀನು ನಮಗೆ ನೀಡಿದ್ದೆಲ್ಲವನ್ನು ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬುದು ನಿಶ್ಚಯ.23ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿದ್ದಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.24ಇಸ್ರಾಯೇಲರು ಸದಾಕಾಲವೂ ನಿನ್ನ ಪ್ರಜೆಯಾಗಿರಬೇಕೆಂದು ನಿರ್ಣಯಿಸಿದ ಯೆಹೋವನೇ, ನೀನು ಅವರಿಗೆ ದೇವರಾದಿ.25ದೇವರೇ, ಯೆಹೋವನೇ! ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನು ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.26ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲರ ದೇವರು ಎಂಬ ನಿನ್ನ ನಾಮಧೇಯಗಳಿಗೆ ಸದಾಕಾಲವೂ ಮಹಿಮೆಯುಂಟಾಗಲಿ. ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರಲಿ.27ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ನಿನ್ನ ಸೇವಕನಾದ ನನಗೆ <ನಾನು ನಿನಗೋಸ್ಕರ ಮನೆ ಕಟ್ಟುವೆನು> ಎಂದು ವಾಗ್ದಾನ ಮಾಡಿದ್ದರಿಂದ ಅವನು ಈ ಪ್ರಕಾರ ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.28ಕರ್ತನೇ, ಯೆಹೋವನೇ! ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ. ನಿನ್ನ ವಾಕ್ಯವು ಸತ್ಯವಾದದ್ದು.29ಆದುದರಿಂದ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸು. ಸದಾಕಾಲವೂ ಅದರ ಮೇಲೆ ನಿನ್ನ ಕಟಾಕ್ಷವಿರಲಿ. ಕರ್ತನೇ, ಯೆಹೋವನೇ! ವಾಗ್ದಾನ ಮಾಡಿದವನು ನೀನೇ. ನಿನ್ನ ಆಶೀರ್ವಾದದಿಂದ ನಿನ್ನ ಸೇವಕನ ಮನೆಯಲ್ಲಿ ನಿತ್ಯ ಸೌಭಾಗ್ಯವಿರಲಿ>> ಎಂದು ವಿಜ್ಞಾಪಿಸಿದನು.
8ದಾವೀದನ ಜಯಗಳು
1ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.2ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.3ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.4ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು.5ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.6ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.7ಅವನು ಹದದೆಜೆರನ ಸೇವಕರ ಬಳಿ ಇದ್ದ ಬಂಗಾರದ ಗುರಾಣಿಗಳನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.8ಇದಲ್ಲದೆ ಅರಸನಾದ ದಾವೀದನು ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು.9ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.10ತೋವಿಗೂ ಹದದೆಜೆರನಿಗೂ ವಿರೋಧವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ ಪಾತ್ರೆಗಳನ್ನು ತಂದನು.11ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಯರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ,12ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.13ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು.14ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.ದಾವೀದನ ಸರದಾರರು
15ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.16ಚೆರೂಯಳ ಮಗನಾದ ಯೋವಾಬನೂ ಅವನ ಸೇನಾಧಿಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ರಾಜವಂಶಸ್ಥದ ಇತಿಹಾಸಕಾರನಾಗಿದ್ದನು.17ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,18ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.
9ದಾವೀದನು ಮೆಫೀಬೋಶೆತನಿಗೆ ದಯೆತೋರಿಸಿದ್ದು
1ಒಂದು ದಿನ ದಾವೀದನು, <<ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ>> ಎನ್ನಲು,2ಅದಕ್ಕೆ ಅವರು ಸೌಲನ ಮನೆಯಲ್ಲಿ ದಾಸನಾಗಿದ್ದ ಚೀಬನೆಂಬ ಒಬ್ಬ ಮನುಷ್ಯನನ್ನು ಕರೆದುಕೊಂಡು ಬಂದರು. ಅರಸನು ಅವನನ್ನು, <<ನೀನು ಚೀಬನೋ?>> ಎಂದು ಕೇಳಲು ಅವನು, <<ನಿನ್ನ ಸೇವಕನಾದ ನಾನು ಚೀಬನೆ>> ಎಂದು ಉತ್ತರ ಕೊಟ್ಟನು.3ಅರಸನು ಅವನಿಗೆ, <<ಸೌಲನ ಕುಟುಂಬದಲ್ಲಿ ಯಾರಾದರೂ ಉಳಿದಿದ್ದರೆ ಹೇಳು, ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ>> ಎಂದನು. ಆಗ ಚೀಬನು ಅರಸನಿಗೆ <<ಯೋನಾತಾನನಿಗೆ ಎರಡೂ ಕಾಲು ಕುಂಟಾದ ಒಬ್ಬ ಮಗನಿದ್ದಾನೆ>> ಎಂದು ಹೇಳಿದನು.4ಅರಸನು, <<ಅವನು ಎಲ್ಲಿರುತ್ತಾನೆ?>> ಎಂದು ಅವನನ್ನು ಕೇಳಲು ಚೀಬನು, <<ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಲ್ಲಿರುತ್ತಾನೆ>> ಎಂದು ಉತ್ತರಕೊಟ್ಟನು.5ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರೆಯಿಸಿದನು.6ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು ಮೆಫೀಬೋಶೆತನೇ ಅನ್ನಲು ಅವನು, <<ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ>> ಎಂದನು.7ಆಗ ದಾವೀದನು ಅವನಿಗೆ, <<ಹೆದರಬೇಡ, ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ, ಮತ್ತು ನೀನು ಪ್ರತಿ ದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು>> ಎಂದು ಹೇಳಿದನು.8ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರಮಾಡಿ, <<ಸತ್ತ ನಾಯಿಯಂತಿರುವ ನನ್ನನ್ನು ನೀನು ಕಟಾಕ್ಷಿಸಲು ನಿನ್ನ ದಾಸನಾದ ನಾನು ಎಷ್ಟರವನು?>> ಎಂದು ಹೇಳಿದನು.9ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು ಅವನಿಗೆ, <<ನಿನ್ನ ಯಜಮಾನನಾದ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿದ್ದೇನೆ.10ನೀನು, ನಿನ್ನ ಮಕ್ಕಳೂ ಮತ್ತು ನಿನ್ನ ದಾಸರು ನಿನ್ನ ಯಜಮಾನನ ಮೊಮ್ಮಗನ ಆಹಾರಕ್ಕಾಗಿ ಭೂಮಿಯನ್ನು ವ್ಯವಸಾಯ ಮಾಡಿ, ಅದರ ಬೆಳೆಯನ್ನು ಇವರ ಮನೆಯವರ ಅಶನಾರ್ಥವಾಗಿ (ಜೀವನಾಂಶಕ್ಕಾಗಿ) ತಂದು ಕೊಡಬೇಕು. ಆದರೆ ಮೆಫೀಬೋಶೆತ್ತಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವುದು>> ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ, ಇಪ್ಪತ್ತು ಮಂದಿ ಸೇವಕರು ಇದ್ದರು.11ಚೀಬನು ಅರಸನಿಗೆ, <<ಒಡೆಯನಾದ ಅರಸನ ಅಪ್ಪಣೆಯಂತೆ ನಿನ್ನ ಸೇವಕನು ನಡೆಯುವನು>> ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುವವನಾದನು.12ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯವರೆಲ್ಲರೂ, ಅವನ ಸೇವಕರಾದರು.13ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದರಿಂದ ಅವನು ಯೆರೂಸಲೇಮಿನಲ್ಲೇ ವಾಸಮಾಡಿದನು. ಅವನ ಎರಡು ಕಾಲುಗಳು ಕುಂಟಾಗಿದ್ದವು.
10ದಾವೀದನು ಅಮ್ಮೋನಿಯರ ಮತ್ತು ಅರಾಮ್ಯರ ವಿರುದ್ಧ ಯುದ್ಧಮಾಡಿದ್ದು
1ಇದಾದ ನಂತರ ಅಮ್ಮೋನಿಯರ ಅರಸನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ಅರಸನಾದನು.2ದಾವೀದನು, <<ನಾಹಾಷನು ನನಗೆ ದಯೆತೋರಿಸಿದ್ದರಿಂದ, ನಾನು ಅವನ ಮಗ ಹಾನೂನನಿಗೂ ದಯೆತೋರಿಸುವೆನು>> ಎಂದುಕೊಂಡು, ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ತನ್ನ ಪ್ರತಿನಿಧಿಗಳನ್ನು ಕಳುಹಿಸಿದನು. ದಾವೀದನ ಪ್ರತಿನಿಧಿಗಳು ಅಮ್ಮೋನಿಯರ ದೇಶಕ್ಕೆ ಬಂದರು.3ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, <<ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧಿನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ>> ಎಂದು ಹೇಳಿದರು.4ಇದರಿಂದ ಹಾನೂನನು ದಾವೀದನ ಪ್ರತಿನಿಧಿಗಳನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಸೊಂಟದಿಂದ ಕೆಳಗೆ ಅವರ ನಗ್ನತೆಯು ಕಾಣುವಂತೆ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.5ಅವರು ಈ ವರ್ತಮಾನವನ್ನು ದಾವೀದನಿಗೆ ಹೇಳಿ ಕಳುಹಿಸಿದಾಗ ಅವನು ಬಹಳವಾಗಿ ಅಪಮಾನ ಹೊಂದಿದ ಅವರಿಗೆ <<ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋ ಪಟ್ಟಣದಲ್ಲಿದ್ದು ಅನಂತರ ಹಿಂತಿರುಗಿ ಬನ್ನಿರಿ>> ಎಂದು ತನ್ನ ಸೇವಕರ ಮೂಲಕ ಹೇಳಿಕಳುಹಿಸಿದ.6ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು7ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು.8ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹರಚಿಸಿದರು. ಚೋಬ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮತ್ತು ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.9ಯೋವಾಬನು ತನ್ನ ಮುಂದೆಯೂ, ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.10ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟನು.11ಯೋವಾಬನು ಅವನಿಗೆ, <<ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ. ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.12ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ>> ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.13ಯೋವಾಬನು ಅವನ ಜನರು ಅರಾಮ್ಯರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.14ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ, ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಅಮ್ಮೋನಿಯರೊಡನೆ ಯುದ್ಧ ಮಾಡುವುದನ್ನು ಬಿಟ್ಟು ಯೆರೂಸಲೇಮಿಗೆ ಹೋದನು.15ಅರಾಮ್ಯರಿಗೆ ತಮ್ಮ ಸೈನ್ಯವು ಇಸ್ರಾಯೇಲ್ಯರಿಂದ ಅಪಜಯಹೊಂದಿತೆಂದು ಗೊತ್ತಾದಾಗ ಅವರೆಲ್ಲರೂ ಒಟ್ಟಾಗಿ ಕೂಡಿಬಂದರು.16ಹದದೆಜೆರನು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಬರಲು ಹೇಳಿ ಕಳುಹಿಸಿದನು. ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.17ಈ ಸುದ್ದಿಯು ದಾವೀದನಿಗೆ ತಲುಪಿದಾಗ ಅವನು ಇಸ್ರಾಯೇಲರೆಲ್ಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ವ್ಯೂಹರಚಿಸಿ ದಾವೀದನೊಡನೆ ಯುದ್ಧಕ್ಕೆ ನಿಂತಾಗ,18ಅರಾಮ್ಯರು ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುನೂರು ರಥ ಸಾರಥಿಗಳನ್ನು ನಾಶ ಮಾಡಿ, ನಲ್ವತ್ತು ಸಾವಿರ ಮಂದಿ ರಾಹುತರನ್ನು ಹತ್ಯೆಮಾಡಿದನು. ಸೇನಾಧಿಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.19ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರಿಂದ ತಾವು ಸೋತುಹೋದೆವೆಂದು ತಿಳಿದು, ಅವರೊಡನೆ ಒಪ್ಪಂದ ಮಾಡಿಕೊಂಡು, ಅವರಿಗೆ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಧೈರ್ಯದಿಂದ ಮುಂದೆ ಬರಲಿಲ್ಲ.
11ದಾವೀದನ ನೀಚಕೃತ್ಯಗಳು
1ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.2ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.3ಕೂಡಲೆ ದಾವೀದನು ಒಬ್ಬನನ್ನು ಕರೆದು, <<ಆ ಸ್ತ್ರೀ ಯಾರು?>> ಎಂದು ವಿಚಾರಿಸಲು ಅವನು, <<ಆಕೆಯು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆ ಅಲ್ಲವೇ?>> ಎಂದು ಉತ್ತರ ಕೊಟ್ಟನು.4ಆಗ ದಾವೀದನು ಆಗ ತಾನೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ಕರೆದು ತರುವಂತೆ ದೂತರನ್ನು ಕಳುಹಿಸಿದನು. ಆಕೆಯು ಬರಲು ಅವನು ಆಕೆಯನ್ನು ಸಂಗಮಿಸಿದನು. ಅನಂತರ ಆಕೆಯು ತನ್ನ ಮನೆಗೆ ಹೋದಳು.5ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು.6ಆಗ ದಾವೀದನು ದೂತರ ಮುಖಾಂತರವಾಗಿ ಯೋವಾಬನಿಗೆ, <<ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು>> ಎಂದು ಹೇಳಿ ಕಳುಹಿಸಿದನು. ಅವನು ಊರೀಯನನ್ನು ಕಳುಹಿಸಿದನು.7ಊರೀಯನು ಬಂದಾಗ ದಾವೀದನು, <<ಯೋವಾಬನೂ ಮತ್ತು ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದಿದೆ?>> ಎಂದು ವಿಚಾರಿಸಿದ, ನಂತರ8ಅವನಿಗೆ, <<ಮನೆಗೆ ಹೋಗಿ ಕೈಕಾಲು ತೊಳೆದುಕೋ >> ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು.9ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು.10ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನವು ದಾವೀದನಿಗೆ ತಿಳಿದಾಗ ಅವನು ಊರೀಯನಿಗೆ, <<ನೀನು ಪ್ರಯಾಣಮಾಡಿಕೊಂಡು ಬಂದಿಯಲ್ಲಾ, ಯಾಕೆ ಮನೆಗೆ ಹೋಗಲಿಲ್ಲ?>> ಅಂದನು.11ಅದಕ್ಕೆ ಊರೀಯನು, <<ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ>> ಎಂದು ಉತ್ತರಕೊಟ್ಟನು.12ಆಗ ದಾವೀದನು ಅವನಿಗೆ, <<ನೀನು ಈ ಹೊತ್ತು ಇಲ್ಲೇ ಇರು. ನಾಳೆ ನಿನ್ನನ್ನು ಕಳುಹಿಸುತ್ತೇನೆ>> ಎಂದು ಆಜ್ಞಾಪಿಸಿದನು. ಊರೀಯನು ಆ ದಿನ ಯೆರೂಸಲೇಮಿನಲ್ಲೇ ಇದ್ದನು.13ಮರುದಿನ ದಾವೀದನು ಅವನನ್ನು ಅನ್ನಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.14ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟು ಕಳುಹಿಸಿದನು.15ಅದರಲ್ಲಿ, <<ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂಭಾಗದಲ್ಲಿ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿರಿ>> ಎಂಬುದಾಗಿ ಬರೆದಿದ್ದನು.16ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶೂರರಾದ ಶತ್ರುಸೈನಿಕರು ಎಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು.17ಆ ಊರಿನ ಜನರು ಹೊರಗೆ ಬಂದು ಯೋವಾಬನೊಡನೆ ಕಾದಾಡಿದಾಗ ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಸಹ ಸತ್ತನು.18ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು ಅವನಿಗೆ, <<ನೀನು ಹೋಗಿ ದಾವೀದನಿಗೆ ಯುದ್ಧ ವರ್ತಮಾನವನ್ನೆಲ್ಲಾ ತಿಳಿಸು.19ನೀನು ಯುದ್ಧ ಸಮಾಚಾರವನ್ನು ಹೇಳಿ ಮುಗಿಸಿದ ನಂತರ ಅರಸನು ಕೋಪಗೊಂಡು ನಿನ್ನನ್ನು,20<ನೀವು ಯುದ್ಧ ಮಾಡುವುದಕ್ಕಾಗಿ ಪಟ್ಟಣದ ಸಮೀಪಕ್ಕೆ ಹೋದದ್ದೇಕೆ? ಶತ್ರುಗಳು ಊರಗೋಡೆಯ ಮೇಲಣಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ?21ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?> ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು>> ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.22ಆ ದೂತನು ಹೋಗಿ ಯೋವಾಬನ ಆಜ್ಞೆಯಂತೆ ದಾವೀದನಿಗೆ ತಿಳಿಸಿದ್ದೇನೆಂದರೆ,23<<ಆ ಊರಿನವರು ಮಹಾಸೈನ್ಯಬಲದೊಡನೆ ಯುದ್ಧಮಾಡುವುದಕ್ಕೆ ಬಯಲಿಗೆ ಬಂದರು. ನಾವು ಅವರನ್ನು ಊರ ಬಾಗಿಲಿನವರೆಗೂ ಹಿಂದಟ್ಟಿದೆವು.24ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದ್ದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಸತ್ತನು>> ಎಂದನು.25ಅದಕ್ಕೆ ದಾವೀದನು ದೂತನಿಗೆ, <<ನೀನು ಹೋಗು, ಇದಕ್ಕೋಸ್ಕರ ವ್ಯಸನಪಡಬೇಡ. ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ, ನಾಳೆ ಇನ್ನೊಬ್ಬನನ್ನು ನುಂಗುವುದು, ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬುದಾಗಿ ಅರಸನು ಆಜ್ಞಾಪಿಸುತ್ತಾನೆ ಎಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು>> ಎಂದನು.26ಊರೀಯನ ಮರಣದ ವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು.27ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.
12ದಾವೀದನಿಗೆ ನಾತಾನನ ಮುಖಾಂತರ ಸಂದೇಶ
1ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, <<ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು ಇನ್ನೊಬ್ಬನು ಬಡವನು.2ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು.3ಬಡವನಿಗೆ ಒಂದು ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ಮಗಳಂತೆ ಅವನ ಸಂಗಡಲೂ, ಅವನ ಮಕ್ಕಳ ಸಂಗಡಲೂ ಬೆಳೆಯುತ್ತಾ, ಅವರೊಡನೆ ರೊಟ್ಟಿ ತಿನ್ನುತ್ತಾ, ಅವರ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆ ಮೇಲೆಯೇ ಒರಗಿಕೊಂಡು ನಿದ್ದೆ ಮಾಡುತ್ತಿತ್ತು.4ಒಂದು ದಿನ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐಶ್ವರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಹೆಣ್ಣುಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅಡಿಗೆ ಮಾಡಿಸಿದನು>> ಎಂದು ಹೇಳಿದನು.5ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, <<ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು.6ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು>> ಎಂದನು.7ಆಗ ನಾತಾನನು ದಾವೀದನನ್ನು ನೋಡಿ, <<ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, <ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ.8ಇದಲ್ಲದೆ ನಾನು ನಿನಗೆ ನಿನ್ನ ಯಜಮಾನನ ಮನೆಯನ್ನು ಒಪ್ಪಿಸಿದೆನು. ಅವನ ಹೆಂಡತಿಯರನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಇಸ್ರಾಯೇಲ್ ಹಾಗೂ ಯೆಹೂದ ಕುಲಗಳನ್ನು ನಿನಗೆ ವಶಪಡಿಸಿದೆನು. ಇದೂ ಸಾಕಾಗಾದೆ ಹೋಗಿದ್ದರೆ ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆನು.9ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.10ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ.11ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ.12ನಾನು ಹೇಳುವ ಮಾತಾದರೋ ಎಲ್ಲಾ ಇಸ್ರಾಯೇಲ್ಯರ ಮುಂದೆ ಹಗಲಿನಲ್ಲೇ ನೆರವೇರುವುದು> >> ಎಂದನು.ದಾವೀದನ ಪಶ್ಚಾತ್ತಾಪ
13ಆಗ ದಾವೀದನು ನಾತಾನನಿಗೆ, <<ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ>> ಎಂದು ಹೇಳಿದನು. ನಾತಾನನು ಅವನಿಗೆ <<ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.14ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು>> ಎಂದು ಹೇಳಿ ಮನೆಗೆ ಹೊರಟುಹೋದನು.15ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗು ಯೆಹೋವನ ಪೆಟ್ಟಿನಿಂದ ಬಹಳವಾಗಿ ಅಸ್ವಸ್ಥವಾಯಿತು.16ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.17ಅವನ ಮನೆಯ ಹಿರಿಯ ಸೇವಕರು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೇ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.18ಏಳನೆಯ ದಿನ ಮಗು ಸತ್ತುಹೋಯಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, <<ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣದ ವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ>> ಎಂದು ಮಾತನಾಡಿಕೊಳ್ಳುತ್ತಿದ್ದರು.19ಸೇವಕರು ಈ ಪ್ರಕಾರ ಪಿಸುಗುಟ್ಟುವುದನ್ನು ಕಂಡು ದಾವೀದನು, ಮಗು ಸತ್ತು ಹೋಯಿತೆಂದು ತಿಳಿದು ಸೇವಕರನ್ನು, <<ಮಗು ಸತ್ತುಹೋಯಿತೋ?>> ಎಂದು ಕೇಳಿದನು. ಅವರು, <<ಹೌದು ಸತ್ತುಹೋಯಿತು>> ಎಂದು ಉತ್ತರ ಕೊಟ್ಟರು20ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.21ಇದನ್ನು ನೋಡಿ ಅವನ ಸೇವಕರು ಅವನಿಗೆ, <<ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸಮಾಡಿದ್ದೀ. ಹುಡುಗನು ಸತ್ತ ನಂತರ ಎದ್ದು ಊಟ ಮಾಡಿರುವೆ>> ಎಂದರು.22ದಾವೀದನು ಅವರಿಗೆ, <<ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು.23ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ>> ಎಂದು ಉತ್ತರ ಕೊಟ್ಟನು.ಸೊಲೊಮೋನನ ಜನನ
24ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆಯು ಒಬ್ಬ ಮಗನನ್ನು ಹೆತ್ತಾಗ ದಾವೀದನು ಅವನಿಗೆ <<ಸೊಲೊಮೋನನು>> ಎಂದು ಹೆಸರಿಟ್ಟನು. ಯೆಹೋವನು ಅವನನ್ನು ಪ್ರೀತಿಸಿದನು.25ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಯೆಹೋವನ ಪ್ರೀತಿಯ ನಿಮಿತ್ತ ಆ ಹುಡುಗನಿಗೆ << ಯೆದೀದ್ಯ>> ಎಂದು ಹೆಸರಿಟ್ಟನು.ದಾವೀದನು ರಬ್ಬ ಪಟ್ಟಣವನ್ನು ವಶಮಾಡಿಕೊಂಡದ್ದು
26ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.27ಯೋವಾಬನು ದಾವೀದನಿಗೆ ದೂತರ ಮುಖಾಂತರವಾಗಿ, <<ನಾನು ರಬ್ಬಕ್ಕೆ ಮುತ್ತಿಗೆ ಹಾಕಿ, ಹೊಳೆಯ ಬಳಿಯಲ್ಲಿರುವ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.28ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ, ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ, ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವುದು>> ಎಂದು ಹೇಳಿ ಕಳುಹಿಸಿದನು.29ಆಗ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಮಾಡಿಕೊಂಡನು.30ಇದಲ್ಲದೆ ಅವನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲೆ ತೂಕವುಳ್ಳದ್ದಾಗಿತ್ತು. ಅಲ್ಲದೆ ಅದರಲ್ಲಿ ಅಮೂಲ್ಯರತ್ನವನ್ನು ಇರಿಸಲಾಗಿತ್ತು. ಅವರು ಅದನ್ನು ದಾವೀದನ ಶಿರಸ್ಸಿನ ಮೇಲಿರಿಸಿದರು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು.31ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.
13ಅಮ್ನೋನನು ಮತ್ತು ತಾಮಾರಳು
1ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಸುಂದರಿಯಾದ ಒಬ್ಬಳು ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು.2ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ತಾಮಾರಳು ಕನ್ಯೆಯಾಗಿದ್ದರಿಂದ ಆಕೆಗೆ ಏನು ಮಾಡಲು ಸಾಧ್ಯವಿಲ್ಲವೆಂದು ಅಮ್ನೋನನು ತಿಳಿದನು.3ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು.4ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, <<ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ>> ಎಂದು ಕೇಳಲು ಅವನು, <<ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ>> ಎಂದು ಉತ್ತರ ಕೊಟ್ಟನು.5ಆಗ ಯೋನಾದಾಬನು ಅವನಿಗೆ, <<ನೀನು ಅಸ್ವಸ್ಥನಾದವನಂತೆ ಹಾಸಿಗೆಯ ಮೇಲೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ನೋಡುವುದಕ್ಕೆ ಬಂದಾಗ ಅವನಿಗೆ, <ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸು. ಆಕೆ ನನ್ನೆದುರಿನಲ್ಲಿಯೆ ಸಿದ್ಧಮಾಡಿ, ತನ್ನ ಕೈಯಿಂದಲೇ ಊಟಮಾಡಿಸಲಿ> ಎಂದು ಹೇಳು>> ಎಂದನು.6ಅಮ್ನೋನನು ಅಸ್ವಸ್ಥನಾದವನಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, <<ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು. ಆಕೆ ನನಗೋಸ್ಕರ ನನ್ನ ಕಣ್ಣ ಮುಂದೆಯೇ ಆಹಾರವನ್ನು ಸಿದ್ಧಮಾಡಿಕೊಡುವುದಾದರೆ ಊಟಮಾಡುವೆನು>> ಎಂದು ಹೇಳಿದನು.7ಆಗ ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ, <<ನೀನು ನಿನ್ನ ಅಣ್ಣನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಆಹಾರವನ್ನು ಸಿದ್ಧಮಾಡು>> ಎಂದು ಹೇಳಿದನು.8ಕೂಡಲೆ ಆಕೆಯು ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು. ಅವನು ಮಲಗಿದ್ದನು. ಆಕೆಯು ಹೋಗಿ ಹಿಟ್ಟು ತೆಗೆದುಕೊಂಡು ನಾದಿ, ಅವನ ಕಣ್ಣ ಮುಂದೆಯೇ ರೊಟ್ಟಿಗಳನ್ನು ಮಾಡಿದಳು.9ಅನಂತರ ಆಕೆಯು ಅವುಗಳನ್ನು ಪಾತ್ರೆಯಿಂದ ತೆಗೆದು, ಅವನ ಮುಂದೆ ಇಟ್ಟಳು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು.10ಎಲ್ಲರೂ ಹೋದ ಮೇಲೆ ಅವನು ತಾಮಾರಳಿಗೆ, <<ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ; ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ>> ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಆಹಾರವನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು.11ಕೂಡಲೆ ಅವನು ಆಕೆಯನ್ನು ಹಿಡಿದು <<ನನ್ನ ತಂಗಿಯೇ ಬಂದು ನನ್ನ ಸಂಗಡ ಮಲಗಿಕೋ>> ಎಂದನು.12ಆಕೆಯು; <<ಅಣ್ಣನೇ, ಬೇಡ, ನನ್ನನ್ನು ಅಪಮಾನಪಡಿಸಬೇಡ, ಇಸ್ರಾಯೇಲರಲ್ಲಿ ಇಂಥ ನೀಚಕಾರ್ಯವು ನಡೆಯಬಾರದು. ಇಂಥ ಅವಮಾನಕರವಾದ ಕೆಲಸವನ್ನು ಮಾಡಬೇಡ.13ಈ ಅಪಮಾನವನ್ನು ನಾನು ಮರೆಮಾಡುವುದಾದರೂ ಹೇಗೆ? ನಿನಗಂತೂ ಇಸ್ರಾಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಆದುದರಿಂದ ದಯವಿಟ್ಟು ಅರಸನ ಸಂಗಡ ಮಾತನಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು>> ಎಂದಳು.14ಆದರೆ ಅವನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಆಕೆಯ ಮಾತನ್ನು ಕೇಳದೆ ಬಲಾತ್ಕಾರದಿಂದ ಆಕೆಯನ್ನು ಕೆಡಿಸಿದನು.15ಇದಾದ ಮೇಲೆ ಅವನಿಗೆ ಆಕೆಯ ಮೇಲೆ ದ್ವೇಷಹುಟ್ಟಿತು. ಅವಳ ಬಗ್ಗೆ ಇದ್ದ ಪ್ರೀತಿಗಿಂತ ಆಕೆಯ ಮೇಲಿನ ದ್ವೇಷವೇ ಹೆಚ್ಚಾಯಿತು.16ಅಮ್ನೋನನು ಆಕೆಗೆ, <<ಎದ್ದು ಹೋಗು>> ಎಂದು ಹೇಳಿದಾಗ ಆಕೆಯು, <<ಹಾಗೆ ಮಾಡಬೇಡ, ನನ್ನನ್ನು ಹೊರಡಿಸಿಬಿಡುವುದು ನೀನು ಮಾಡಿದ ಮೊದಲನೆಯ ಅನ್ಯಾಯಕ್ಕಿಂತ ಹೆಚ್ಚಿನ ಅನ್ಯಾಯವಾಗಿದೆ>> ಅಂದಳು.17ಆದರೆ ಅವನು ಆಕೆಯ ಮಾತನ್ನು ಕೇಳದೆ, ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಆಳನ್ನು ಕರೆದು ಅವನಿಗೆ, <<ಇವಳನ್ನು ಹೊರಗೆ ತಳ್ಳಿ ಕದವನ್ನು ಮುಚ್ಚು>> ಎಂದು ಆಜ್ಞಾಪಿಸಿದನು.18ಆಕೆಯು ನಾನಾ ವರ್ಣವುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಇದೇ ತರಹದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು. ಆತನ ಸೇವಕರು ಆಕೆಯನ್ನು ಹೊರಗೆ ಕಳುಹಿಸಿ ಕದವನ್ನು ಮುಚ್ಚಿದನು.19ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.20ಆಕೆಯ ಸಹೋದರನಾದ ಅಬ್ಷಾಲೋಮನು ಆಕೆಯನ್ನು ಕಂಡು, <<ನಿನ್ನ ಅಣ್ಣನಾದ ಅಮ್ನೋನನು ನಿನ್ನನ್ನು ಸಂಗಮಿಸಿದನೋ? ತಂಗಿ, ಈಗ ಸುಮ್ಮನಿರು. ಅವನು ನಿನ್ನ ಅಣ್ಣನಲ್ಲವೋ? ಈ ಸಂಗತಿಯನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ>> ಎಂದು ಹೇಳಿದನು. ತಾಮಾರಳು ಒಂಟಿಯಾಗಿ ತನ್ನ ಅಣ್ಣನಾದ ಅಬ್ಷಾಲೋಮನ ಮನೆಯಲ್ಲೇ ವಾಸಮಾಡಿದಳು.21ಅರಸನಾದ ದಾವೀದನು ಈ ಸಂಗತಿಯನ್ನು ಕೇಳಿ ಬಹಳವಾಗಿ ಕೋಪಗೊಂಡನು.22ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೆಯ ಮಾತುಗಳನ್ನಾಗಲಿ ಕೆಟ್ಟ ಮಾತುಗಳನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.ಅಬ್ಷಾಲೋಮನು ಅಮ್ನೋನನನ್ನು ಕೊಂದದ್ದು
23ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು.24ಅವನು ಅರಸನ ಬಳಿಗೆ ಹೋಗಿ ಅವನನ್ನು, <<ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರೆಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಬರಲಿ>> ಎಂದು ಬೇಡಿಕೊಂಡನು.25ಅರಸನು ಅವನಿಗೆ, <<ಮಗನೇ ಬೇಡ ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು>> ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಹೋಗಲಿಲ್ಲ. ಅವನನ್ನು ಆಶೀರ್ವದಿಸಿದನು ಅಷ್ಟೇ.26ಆಗ ಅಬ್ಷಾಲೋಮನು, <<ನೀನು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ಕಳುಹಿಸು>> ಅಂದನು. ಅದಕ್ಕೆ ಅರಸನು, <<ಅವನೇಕೆ ನಿನ್ನ ಸಂಗಡ ಬರಬೇಕು?>> ಎಂದು ಕೇಳಿದನು.27ಆದರೆ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನು ಕಳುಹಿಸಿದನು.28ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, <<ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ>> ಎಂದು ಹೇಳಿದನು.29ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.30ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, <<ಅಬ್ಷಾಲೋಮನು ರಾಜಪುತ್ರರೆಲ್ಲರನ್ನು ಕೊಂದು ಹಾಕಿದನು ಒಬ್ಬನನ್ನೂ ಉಳಿಸಲಿಲ್ಲ>> ಎಂಬ ಸುದ್ದಿ ಮುಟ್ಟಿತು.31ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.32ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, <<ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಾಗಿನಿಂದ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದಲೇ ತೋರುತ್ತಿತ್ತು.33ಆದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸನು ಲಕ್ಷ್ಯಕೊಡದಿರಲಿ. ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ>> ಎಂದು ಹೇಳಿ ಸಂತೈಸಿದನು.34ಅಬ್ಷಾಲೋಮನು ತಪ್ಪಿಸಿಕೊಂಡು ಓಡಿಹೋದನು. ಅಷ್ಟರಲ್ಲಿ ದಾರಿನೋಡುತ್ತಿದ್ದ ಕಾವಲುಗಾರನು, ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವುದನ್ನು ಕಂಡನು.35ಯೋನಾದಾಬನು ಅರಸನಿಗೆ, <<ಇಗೋ ರಾಜಕುಮಾರರು ಬರುತ್ತಿದ್ದಾರೆ. ನಿನ್ನ ಸೇವಕನ ಮಾತಿನಂತೆಯೆ ಆಯಿತಲ್ಲವೋ?>> ಎಂದು ಹೇಳಿ ಮುಗಿಸುವಷ್ಟರಲ್ಲಿ,36ರಾಜಕುಮಾರರು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು.37ದಾವೀದನು ತನ್ನ ಮಗನಿಗೋಸ್ಕರ ಪ್ರತಿದಿನವೂ ದುಃಖಪಡುತ್ತಿದ್ದನು.38ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು.39ಅರಸನಾದ ದಾವೀದನು ಅಮ್ನೋನನ ಮರಣದ ವಿಷಯವಾಗಿ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ನೋಡುವುದಕ್ಕಾಗಿ ಬಹಳ ಆಸೆಪಟ್ಟನು.
14ಅಬ್ಷಾಲೋಮನು ಹಿಂದಿರುಗಲು ಯೋವಾಬನ ಪ್ರಯತ್ನ
1ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು2ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, <<ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,3ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು>> ಎಂದು ಆಜ್ಞಾಪಿಸಿ, ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.4ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು, <<ಅರಸನೇ ರಕ್ಷಿಸು>> ಎಂದು ಕೂಗಿದಳು.5ಅರಸನು, <<ನಿನಗೇನಾಯಿತು?>> ಎಂದು ಆಕೆಯನ್ನು ಕೇಳಲು ಆಕೆಯು,6<<ನಾನು ವಿಧವೆ, ಗಂಡನು ಸತ್ತು ಹೋಗಿದ್ದಾನೆ. ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿನ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರು ಯಾರೂ ಇರಲಿಲ್ಲವಾದ್ದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.7ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು <ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ> ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ>> ಎಂದು ಉತ್ತರ ಕೊಟ್ಟಳು.8ಆಗ ಅರಸನು, <<ನೀನು ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ>> ಎಂದು ಹೇಳಿದನು.9ಆ ತೆಕೋವದ ಸ್ತ್ರೀಯು, <<ಅರಸನೇ, ಒಡೆಯನೇ ಅಪರಾಧವು ನನ್ನ ಮೇಲೆಯೂ, ನನ್ನ ಕುಟುಂಬದ ಮೇಲೆಯು ಇರಲಿ. ಅರಸನಿಗೂ ಅವನ ಸಿಂಹಾಸನಕ್ಕೂ ದೋಷ ಹತ್ತದಿರಲಿ>> ಎಂದಳು.10ಅರಸನು ಆಕೆಗೆ, <<ಹಾಗೆ ಅಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ>> ಎಂದನು.11ಆಗ ಆ ಸ್ತ್ರೀಯು, <<ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ನಾಶಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬುದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು>> ಎಂದು ಬೇಡಿಕೊಂಡಳು. ಅದಕ್ಕೆ ಅರಸನು, <<ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ>> ಎಂದು ಹೇಳಿದನು.12ಆಗ ಸ್ತ್ರೀಯು, <<ನನ್ನ ಒಡೆಯನೇ, ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ>> ಅನ್ನಲು ಅರಸನು, <<ಹೇಳು>> ಎಂದನು.13ಆಕೆಯು, <<ಅರಸನು ಈ ತೀರ್ಪು ಕೊಟ್ಟಿದ್ದರಿಂದ ತನ್ನನ್ನು ತಾನೇ ಅಪರಾಧಿ ಎಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟ ಮಗನನ್ನು ಸೇರಿಸಿಕೊಳ್ಳದೆ ಹೋಗುವುದರಿಂದ ದೇವಪ್ರಜೆಗೆ ವಿರೋಧವಾಗಿ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?14ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.15ಅದಿರಲಿ ಜನರು ನಿನ್ನ ಸೇವಕಿಯಾದ ನನ್ನನ್ನು ಹೆದರಿಸಿದ್ದರಿಂದ, <ನಾನು ಈ ಸಂಗತಿಯನ್ನು ಅರಸನಿಗೆ ತಿಳಿಸಿದರೆ, ತನ್ನ ಸೇವಕಿಯ ಬಿನ್ನಹವನ್ನು ಲಾಲಿಸಬಹುದು ಎಂದುಕೊಂಡು ನನ್ನ ಒಡೆಯನಾದ ಅರಸನಿಗೆ ಇದನ್ನು ತಿಳಿಸುವುದಕ್ಕೆ ಬಂದೆನು ಎಂದಳು.16ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ, ನನ್ನ ಮಗನನ್ನೂ ದೇವರ ಸ್ವತ್ತಿನಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.>17ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ>> ಎಂದಳು.18ಆಗ ಅರಸನು ಆ ಸ್ತ್ರೀಗೆ, <<ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ. ನೀನು ಅದನ್ನು ಮರೆಮಾಚದೆ ತಿಳಿಸಬೇಕು>> ಎಂದನು. ಆಗ ಆಕೆಯು, <<ಅರಸನ ಅಪ್ಪಣೆಯಾಗಲಿ>> ಎಂದು ಉತ್ತರಕೊಟ್ಟಳು.19ಅರಸನು, <<ಈ ಕಾರ್ಯದಲ್ಲಿ ಯೋವಾಬನ ಕೈವಾಡ ಇದೆಯೇ?>> ಎಂದು ಕೇಳಿದನು. ಅದಕ್ಕೆ ಆ ಸ್ತ್ರೀಯು, <<ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ, ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ. ನಿನ್ನ ದಾಸಿಯಾದ ನನ್ನನ್ನು ಪ್ರೇರೇಪಿಸಿ, ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿ ಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.20ಅಬ್ಷಾಲೋಮನು ನಡೆದಿರುವ ಘಟನೆಯಿಂದ ಅರಸನು ಕೋಪಗೊಳ್ಳದೆ ಇರುವಂತೆ ವಿಷಯವನ್ನು ಈ ರೀತಿ ಹೇಳುವಂತೆ ನಿನ್ನ ಸೇವಕನಾದ ಯೋವಾಬನೇ ಇದನ್ನು ಕಲಿಸಿದನು. ಆದರೆ ನನ್ನ ಒಡೆಯನು ದೇವದೂತನಂಥ ಜ್ಞಾನಿ. ಅವನು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವನು>> ಎಂದು ಉತ್ತರಕೊಟ್ಟಳು.21ಅನಂತರ ಅರಸನು ಯೋವಾಬನಿಗೆ, <<ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ, ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರೆದುಕೊಂಡು ಬಾ>> ಅಂದನು.ದಾವೀದ ಅಬ್ಷಾಲೋಮರ ಸಂಧಾನ
22ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, <<ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು>> ಎಂದು ಹೇಳಿದನು.23ನಂತರ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.24ಆದರೆ ಅರಸನು, <<ಅಬ್ಷಾಲೋಮನು ತನ್ನ ಮನೆಗೆ ಹೋಗಲಿ, ಅವನು ನನ್ನ ಮುಖವನ್ನು ನೋಡಬಾರದು>> ಎಂದು ಆಜ್ಞಾಪಿಸಿದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ.25ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ.26ಅವನ ತಲೆಯ ಕೂದಲು ಬಹು ಭಾರವಾದ್ದರಿಂದ ಪ್ರತಿ ವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ಕೂದಲು ರಾಜರ ತೂಕದ ಪ್ರಕಾರ ಇನ್ನೂರು ರೂಪಾಯಿ ತೂಕವಾಗುತ್ತಿತ್ತು.27ಅವನಿಗೆ ಮೂರು ಮಂದಿ ಗಂಡು ಮಕ್ಕಳೂ, ಒಬ್ಬಳು ಮಗಳು ಇದ್ದಳು. ಮಗಳ ಹೆಸರು ತಾಮಾರಳು. ಈಕೆಯು ಬಹು ಸುಂದರಿಯಾಗಿದ್ದಳು.28ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರ್ಷ ಯೆರೂಸಲೇಮಿನಲ್ಲೇ ವಾಸವಾಗಿದ್ದನು.29ಒಂದು ದಿನ ಅವನು ಅರಸನ ಬಳಿಗೆ ಕಳುಹಿಸುವುದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ.30ಆದುದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ, <<ನೋಡಿರಿ, ಸಮೀಪದಲ್ಲಿಯೇ ಯೋವಾಬನ ಜವೆಗೋದಿಯ ಹೊಲವುಂಟಲ್ಲಾ, ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ>> ಎಂದು ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.31ಆಗ ಯೋವಾಬನು ಅಬ್ಷಾಲೋಮನ ಮನೆಗೆ ಹೋಗಿ, <<ನಿನ್ನ ಸೇವಕರು ನನ್ನ ಹೊಲಕ್ಕೆ ಬೆಂಕಿ ಹಚ್ಚಿದ್ದೇಕೆ?>> ಎಂದು ಅವನನ್ನು ಕೇಳಿದನು.32ಅದಕ್ಕೆ ಅಬ್ಷಾಲೋಮನು ಅವನಿಗೆ, <<ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ, ಅಲ್ಲೇ ಇದ್ದರೆ ಒಳ್ಳೆಯದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆನು. ನಾನು ಹೇಗೂ ಅರಸನ ದರ್ಶನ ಮಾಡಬೇಕು. ನಾನು ಅಪರಾಧಿಯಾಗಿದ್ದರೆ ನನ್ನನ್ನು ಕೊಲ್ಲಿಸಲಿ>> ಎಂದನು.33ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೇಕಳುಹಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಅರಸನು ಅವನನ್ನು ಮುದ್ದಿಟ್ಟನು.
15ಅಬ್ಷಾಲೋಮನ ಒಳಸಂಚು
1ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.2ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, <<ನೀವು ಯಾವ ಊರಿನರವರು?>> ಎಂದು ಕೇಳುವನು. ಅವರು, <<ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು>> ಎಂದು ಉತ್ತರ ಕೊಡುವರು.3ಆಗ ಅಬ್ಷಾಲೋಮನು, <<ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ.4ವ್ಯಾಜ್ಯವಾಗಲಿ, ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ದೇಶದ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು>> ಎಂದು ಹೇಳುವನು.5ಯಾರಾದರೂ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವರನ್ನು ಕೂಡಲೆ ಕೈಚಾಚಿ ಅವರನ್ನು ಹಿಡಿದು ಮುದ್ದಿಡುವನು.6ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.7ನಾಲ್ಕು ವರ್ಷಗಳಾದ ನಂತರ ಅಬ್ಷಾಲೋಮನು ಅರಸನಿಗೆ, <<ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ.8ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ>> ಎಂದು ವಿಜ್ಞಾಪಿಸಿದನು.9ಆಗ ಅರಸನು, <<ಹೋಗಿಬಾ, ನಿನಗೆ ಶುಭವಾಗಲಿ>> ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟು ಹೋದನು.10ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, <<ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ <ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ> >> ಎಂದು ಹೇಳಿಸಿದ್ದನು.11ಅಬ್ಷಾಲೋಮನು ಯೆರೂಸಲೇಮಿನಿಂದ ಆರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು. ಅವರಿಗೇನೂ ಗೊತ್ತಿರಲಿಲ್ಲ.12ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.ದಾವೀದನು ಯೆರೂಸಲೇಮಿನಿಂದ ಓಡಿಹೋದದ್ದು
13ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು.14ಅವನು ಯೆರೂಸಲೇಮಿನಲ್ಲಿ ತನ್ನ ಸೇವಕರಿಗೆ, <<ಏಳಿರಿ, ಓಡಿಹೋಗೋಣ. ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ. ಅವನು ಆಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು, ನಮಗೆ ದುರ್ಗತಿಯನ್ನು ಉಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸುವನು>> ಎಂದು ಹೇಳಿದನು.15ಸೇವಕರು ಅರಸನಿಗೆ, <<ನಮ್ಮ ಒಡೆಯನಾದ ಅರಸನಿಗೆ ಸರಿ ತೋರಿದ್ದನ್ನು ಮಾಡಲು ನಾವು ಸಿದ್ಧರಾಗಿದ್ದೇವೆ>> ಎಂದು ಉತ್ತರ ಕೊಟ್ಟರು.16ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.17ಅರಸನು ಅವನ ಜೊತೆಯಲ್ಲಿ ಹೊರಟು ಹೋದ ಜನರೆಲ್ಲರೂ ಪಟ್ಟಣದ ಕಡೆಯ ಮನೆಯ ಬಳಿಯಲ್ಲಿ ಸ್ವಲ್ಪ ಹೊತ್ತು ನಿಂತರು.18ದಾವೀದನೂ, ಅವನ ಎಲ್ಲಾ ಸೇವಕರೂ, ಎಲ್ಲಾ ಕೆರೇತ್ಯ ಮತ್ತು ಎಲ್ಲಾ ಪೆಲೇತ್ಯ ಎಂಬ ಕಾವಲು ದಂಡುಗಳೂ, ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಗಿತ್ತೀಯರೂ ಅರಸನ ಮುಂದೆ ಹಾದು ಹೋದರು.19ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, <<ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ಷಾಲೋಮನ ಬಳಿಯಲ್ಲಿ ವಾಸಮಾಡು.20ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ>> ಎಂದು ಹೇಳಿದನು.21ಅದಕ್ಕೆ ಇತ್ತೈ, <<ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು>> ಎಂದು ಉತ್ತರಕೊಟ್ಟನು.22ಆಗ ದಾವೀದನು ಅವನಿಗೆ, <<ಒಳ್ಳೆಯದು, ಮುಂದೆ ನಡೆ>> ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೇವಕರನ್ನೂ, ಕುಟುಂಬದವರನ್ನೂ ಕರೆದುಕೊಂಡು ಮುಂದೆ ನಡೆದನು.23ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.24ಚಾದೋಕನೂ ಅವನ ವಶದಲ್ಲಿದ್ದ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಅದನ್ನು ಜನರೆಲ್ಲರೂ ದಾಟಿಹೋಗುವವರೆಗೆ ಕೆಳಗಿಳಿಸಿದರು. ಎಬ್ಯಾತಾರನೂ ಯಜ್ಞವನ್ನು ಅರ್ಪಿಸುತ್ತಿದ್ದನು.25ಅರಸನು ಚಾದೋಕನಿಗೆ, <<ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.26ಒಂದು ವೇಳೆ ಆತನು <ನಿನ್ನಲ್ಲಿ ನನಗೆ ಇಷ್ಟವಿಲ್ಲ> ಎಂದುಕೊಂಡರೆ ಇಗೋ, ನಾನು ಇಲ್ಲಿದ್ದೇನೆ. ಆತನು ತನಗೆ ಸರಿ ಕಂಡಂತೆ ಮಾಡಲಿ>> ಎಂದನು.27ಇದಲ್ಲದೆ ಆತನು ಯಾಜಕನಾದ ಚಾದೋಕನಿಗೆ, <<ನೀನು ದರ್ಶಿಯಲ್ಲವೇ? ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನರು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸಮಾಧಾನದಿಂದ ಪಟ್ಟಣಕ್ಕೆ ಹಿಂದಿರುಗು.28ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು>> ಎಂದು ಹೇಳಿದನು.29ಆಗ ಚಾದೋಕನೂ ಮತ್ತು ಎಬ್ಯಾತಾರನೂ ದೇವರ ಮಂಜೂಷವನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗಿ ಅಲ್ಲೇ ವಾಸ ಮಾಡಿದರು.30ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.31ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, <<ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು>> ಎಂದು ಪ್ರಾರ್ಥಿಸಿದನು.32ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು.33ಅರಸನು ಅವನಿಗೆ, <<ನೀನು ನನ್ನ ಸಂಗಡ ಬರುವುದಾದರೆ ನನಗೆ ಹೊರೆಯಾಗಿರುವೆ.34ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ಅರಸನೇ, <ನಾನು ನಿನ್ನ ಸೇವಕನು; ಈ ಮೊದಲು ನಿನ್ನ ತಂದೆಯ ಸೇವೆ ಮಾಡಿದಂತೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ> ಎಂದು ಹೇಳುವುದಾದರೆ, ಆಗ ನೀನು ಅಹೀತೋಫೆಲನ ಆಲೋಚನೆಯನ್ನು ನಿರರ್ಥಕಮಾಡುವುದಕ್ಕೆ ನನಗೋಸ್ಕರ ಅನುಕೂಲ ಮಾಡಿಕೊಟ್ಟಂತಾಗುವುದು.35ಅಲ್ಲಿ ನಿನ್ನ ಸಂಗಡ ಚಾದೋಕ್ ಮತ್ತು ಎಬ್ಯಾತಾರನೂ ಇರುತ್ತಾರಲ್ಲಾ. ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ.36ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು>> ಎಂದು ಹೇಳಿ ಅವನನ್ನು ಕಳುಹಿಸಿದನು.37ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಯೆರೂಸಲೇಮ್ ಪಟ್ಟಣಕ್ಕೆ ಬಂದನು.
16ಚೀಬನು ಅರಸನಿಗೆ ಆಹಾರ ತಂದದ್ದೂ
1ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.2ಅರಸನು ಚೀಬನನ್ನು, <<ಇವುಗಳನ್ನು ಯಾಕೆ ತಂದಿ?>> ಎಂದು ಕೇಳಿದನು. ಅವನು, <<ಅರಸನ ಮನೆಯವರು ಸವಾರಿಮಾಡುವುದಕ್ಕಾಗಿ ಕತ್ತೆಗಳನ್ನು, ಆಳುಗಳು ತಿನ್ನುವುದಕ್ಕಾಗಿ ಹಣ್ಣು ಮತ್ತು ರೊಟ್ಟಿಗಳನ್ನು, ಅರಣ್ಯದಲ್ಲಿ ದಣಿದವರು ಕುಡಿಯುವುದಕ್ಕಾಗಿ ದ್ರಾಕ್ಷಾರಸವನ್ನು ತಂದಿದ್ದೇನೆ>> ಎಂದು ಉತ್ತರಕೊಟ್ಟನು.3ಅರಸನು ತಿರುಗಿ ಅವನನ್ನು, <<ನಿನ್ನ ಯಜಮಾನನ ಮಗನು ಎಲ್ಲಿದ್ದಾನೆ?>> ಎಂದು ಕೇಳಲು ಅವನು, <<ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲರು ಮರಳಿ ತನಗೇ ಕೊಡುವರೆಂದು ಹೇಳಿ ಅವನು ಯೆರೂಸಲೇಮಿನಲ್ಲೇ ಉಳಿದನು>> ಅಂದನು4ಆಗ ಅರಸನು ಅವನಿಗೆ, <<ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ>> ಎಂದು ಹೇಳಲು ಅವನು, <<ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ>> ಎಂದನು.ಶಿಮ್ಮಿಯು ದಾವೀದನನ್ನು ಶಪಿಸಿದ್ದು
5ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ, ಗೇರನ ಮಗನೂ ಆದ ಶಿಮ್ಮೀಯು ದಾವೀದನನ್ನು ಶಪಿಸುತ್ತಾ, ಆ ಊರಿನಿಂದ ಹೊರಗೆ ಬಂದನು.6ಅವನು ದಾವೀದನಿಗೂ, ಅವನ ಎಲ್ಲಾ ಸೇವಕರಿಗೂ, ಎಡಬಲದಲ್ಲಿರುವ ಸೈನಿಕರಿಗೂ ಮತ್ತು ಶೂರರಿಗೂ ಕಲ್ಲೆಸೆಯ ತೊಡಗಿದನು.7ಅವನು ಅವರನ್ನು ಶಪಿಸುತ್ತಾ, <<ಹೋಗು ಕೊಲೆಗಾರನೆ, ನೀಚನೆ ಹೋಗು,8ಸೌಲನ ರಾಜ್ಯವನ್ನು ಕಸಿದುಕೊಂಡು ಅವನ ಮನೆಯವರನ್ನು ಕೊಂದದ್ದಕ್ಕಾಗಿ ಯೆಹೋವನು ನಿನಗೆ ಮುಯ್ಯಿ ತೀರಿಸಿದ್ದಾನೆ. ಆತನು ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನಿಗೆ ಕೊಟ್ಟು ಬಿಟ್ಟನು. ಕೊಲೆಗಾರನೇ ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ>> ಎಂದನು.9ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ, <<ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ಶಪಿಸುವುದೇನು? ಅಪ್ಪಣೆಯಾಗಲಿ. ನಾನು ಅವನಿರುವಲ್ಲಿಗೆ ಹೋಗಿ, ಅವನ ತಲೆಯನ್ನು ಹಾರಿಸಿಕೊಂಡು ಬರುವೆನು>> ಎಂದನು.10ಅದಕ್ಕೆ ಅರಸನು, <<ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, <ದಾವೀದನನ್ನು ಶಪಿಸು> ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ <ನೀನು ಹೀಗೇಕೆ ಮಾಡಿದಿ?> ಎಂದು ಅವನನ್ನು ಕೇಳುವವರು ಯಾರು?>> ಎಂದು ಉತ್ತರ ಕೊಟ್ಟನು.11ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, <<ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.12ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು>> ಎಂದು ಹೇಳಿದನು.13ದಾವೀದನೂ ಅವನ ಜನರೂ ದಾರಿ ಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ, ಕಲ್ಲೆಸೆಯುತ್ತಾ, ಮಣ್ಣೆರೆಚುತ್ತಾ ಗುಡ್ಡದ ಪಕ್ಕದಲ್ಲೇ ನಡೆಯುತ್ತಿದ್ದನು.14ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ, ಹೋಗಬೇಕಾದ ಸ್ಥಳವನ್ನು ಸೇರಿ, ಅಲ್ಲಿ ವಿಶ್ರಮಿಸಿಕೊಂಡರು.ಅಬ್ಷಾಲೋಮನು ಅಹೀತೋಫೆಲನ ಉಪದೇಶದಿಂದ ನಡೆದುಕೊಂಡ ರೀತಿ
15ಅಬ್ಷಾಲೋಮನು ಎಲ್ಲಾ ಇಸ್ರಾಯೇಲರೊಡನೆ ಯೆರೂಸಲೇಮಿಗೆ ಬಂದನು. ಅಹೀತೋಫೇಲನೂ ಅವನ ಸಂಗಡ ಇದ್ದನು.16ಅರ್ಕಿಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, <<ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ>> ಎಂದು ಕೂಗಿದನು.17ಅಬ್ಷಾಲೋಮನು ಅವನಿಗೆ <<ಸ್ನೇಹಿತನ ಬಗ್ಗೆ ನಿನಗಿರುವ ಪ್ರಾಮಾಣಿಕತೆ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ?>> ಅಂದನು.18ಅದಕ್ಕೆ ಹೂಷೈಯು, <<ಹಾಗಲ್ಲ ಯೆಹೋವನೂ, ಈ ಜನರೂ, ಎಲ್ಲಾ ಇಸ್ರಾಯೇಲರೂ ಯಾರನ್ನು ಆರಿಸಿದ್ದಾರೋ ನಾನು ಅವನ ಪಕ್ಷದವನಾಗಿರುತ್ತೇನೆ. ನಾನು ಅವನ ಬಳಿಯಲ್ಲಿ ವಾಸಿಸುವೆನು.19ಇದಲ್ಲದೆ ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವೆ ಸಲ್ಲಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವೆ ಸಲ್ಲಿಸುವೆನು>> ಎಂದು ಉತ್ತರ ಕೊಟ್ಟನು.20ಅನಂತರ ಅಬ್ಷಾಲೋಮನು, <<ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು>> ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.21ಆಗ ಅಹೀತೋಫೆಲನು, <<ಹೋಗಿ ನಿನ್ನ ತಂದೆಯು ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಯರೊಡನೆ ಸಂಗಮಿಸು. ಹೀಗೆ ಮಾಡುವುದಾದರೆ ನೀನು ನಿನ್ನ ತಂದೆಗೆ ವೈರಿಯಾಗುವೆ ಎಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವುದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು>> ಎಂದು ಉತ್ತರ ಕೊಟ್ಟನು.22ಆಗ ಅವರು ಅಬ್ಷಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರ ಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಸಂಗಮಿಸಿದನು.23ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿರುವಷ್ಟು ಬೆಲೆಯಿತ್ತು. ದಾವೀದನೂ ಮತ್ತು ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.
17ಹೂಷೈಯು ಅಹೀತೋಫೆಲನ ಆಲೋಚನೆ ನಿರರ್ಥಕಪಡಿಸಿದ್ದು
1ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, <<ಅಪ್ಪಣೆಯಾಗಲಿ, ನಾನು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.2ಅವನು ದಣಿದವನೂ, ಧೈರ್ಯಗುಂದಿದವನೂ ಆಗಿರುವಾಗಲೇ ಪಕ್ಕನೇ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು. ಅವನ ಜನರೆಲ್ಲರೂ ಓಡಿಹೋಗುವರು.3ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು>> ಎಂದು ಹೇಳಿದನು.4ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.5ಆಮೇಲೆ ಅಬ್ಷಾಲೋಮನು, <<ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನು ಕೇಳೋಣ>> ಎಂದು ಹೇಳಿದನು.6ಹೂಷೈಯನು ಅಬ್ಷಾಲೋಮನ ಬಳಿಗೆ ಬಂದಾಗ ಅವನನ್ನು, <<ಅಹೀತೋಫೆಲನು ಹೀಗೆ ಹೇಳುತ್ತಿದ್ದಾನೆ, ಇದರಂತೆ ಮಾಡಿದರೆ ಒಳ್ಳೆಯದಾಗುವುದೋ, ಇಲ್ಲವಾದರೆ ನಿನ್ನ ಅಭಿಪ್ರಾಯವೇನು?>> ಎಂದು ಕೇಳಿದನು.7ಹೂಷೈಯು ಅಬ್ಷಾಲೋಮನಿಗೆ, <<ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ.8ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.9ಅವನು ಈಗ ಒಂದು ಗುಹೆಯಲ್ಲಾಗಲಿ, ಬೇರೆ ಯಾವುದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಸತ್ತರೆ, ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಅಪಜಯವುಂಟಾಯಿತೆಂದು ಸುದ್ದಿ ಹಬ್ಬಿಸುವರು.10ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.11ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.12ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು.13ಅವನು ಒಂದು ಪಟ್ಟಣವನ್ನು ಹೊಕ್ಕಿರುವುದಾದರೆ, ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ. ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ>> ಎಂದನು.14ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, <<ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ>> ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.ಹೂಷೈಯು ದಾವೀದನನ್ನು ಎಚ್ಚರಿಸಿದ್ದು ಮತ್ತು ಅಹೀತೋಫೆಲನ ಮರಣ
15ತರುವಾಯ ಹೂಷೈಯು ಯಾಜಕನಾದ ಚಾದೋಕ್ ಎಬ್ಯಾತಾರರಿಗೆ, <<ಅಹೀತೋಫೆಲನು ಅಬ್ಷಾಲೋಮನಿಗೂ ಮತ್ತು ಇಸ್ರಾಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು, ನಾನು ಹೀಗೆ ಹೇಳಿದ್ದೇನೆ.16ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, <ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ> ಎಂದು ಹೇಳಿಕಳುಹಿಸಿರಿ>> ಎಂದನು17ಯೋನಾತಾನ ಮತ್ತು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ.18ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು.19ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.20ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, <<ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?>> ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, <<ಅವರು ಹಳ್ಳ ದಾಟಿ ಹೋಗಿಬಿಟ್ಟರು>> ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು.21ಅವರು ಹೋದ ಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋದರು. ಅವರು ದಾವೀದನಿಗೆ, <<ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ. ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗು>> ಎಂದು ಹೇಳಿದನು.22ಆಗ ದಾವೀದನೂ ಮತ್ತು ಅವನ ಜೊತೆಯಲ್ಲಿದ್ದವರೆಲ್ಲರೂ ಯೊರ್ದನ್ ನದಿಯನ್ನು ದಾಟಿದರು. ಬೆಳಗಾದಾಗ ದಾಟಬೇಕಾದವನು ಒಬ್ಬನೂ ಇರಲಿಲ್ಲ.23ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.ದಾವೀದನ ಪ್ರಯಾಣ; ಅವನಿಗೆ ದೊರೆತ ಆದರಣೆ
24ದಾವೀದನು ಮಹನಯಿಮಿಗೆ ಹೋದನು. ಅಬ್ಷಾಲೋಮನು ಮತ್ತು ಇಸ್ರಾಯೇಲರೆಲ್ಲರೂ ಕೂಡಿಕೊಂಡು ಯೊರ್ದನ್ ನದಿಯನ್ನು ದಾಟಿದರು.25ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇಸ್ರಾಯೇಲನಾದ ಇತ್ರನು, ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗೈಲ್ ಎಂಬುವಳನ್ನು ಸಂಗಮಿಸಿದ್ದರಿಂದ ಈ ಅಮಾಸನು ಹುಟ್ಟಿದನು.26ಇಸ್ರಾಯೇಲ್ಯರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ಪಾಳೆಯಮಾಡಿಕೊಂಡರು.27ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವರು28ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳೊಂದಿಗೆ, ಊಟಕ್ಕಾಗಿ ಗೋದಿ, ಜವೆಗೋದಿ, ಹಿಟ್ಟು, ಹುರಿಗಾಳು, ಅವರೆಕಾಳು, ಅಲಸಂದಿ, ಬೇಳೆ ಜೇನುತುಪ್ಪ,29ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.
18ಅಬ್ಷಾಲೋಮನ ಮರಣ
1ತರುವಾಯ ಅರಸನಾದ ದಾವೀದನು ತನ್ನ ಬಳಿಯಲ್ಲಿ ಇದ್ದ ಸೈನಿಕರನ್ನು ಎಣಿಸಿ, ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಮತ್ತು ಶತಾಧಿಪತಿಗಳನ್ನು ನೇಮಿಸಿದನು.2ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, <<ನಾನು ನಿಮ್ಮೊಂದಿಗೆ ಬರುತ್ತೇನೆ>> ಎಂದು ಹೇಳಿದನು.3ಆಗ ಸೈನ್ಯದವರು ಅವನಿಗೆ, <<ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು>> ಎಂದನು.4ಅರಸನು ಅವರಿಗೆ, <<ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ>> ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.5ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, <<ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ>> ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.6ಅನಂತರ ಸೈನಿಕರು ಇಸ್ರಾಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಾಯೀಮಿನ ಕಾಡಿನಲ್ಲಿ ಯುದ್ಧವಾಯಿತು.7ಇಸ್ರಾಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.8ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.9ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.10ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, <<ಅಗೋ, ಆ ದೇವದಾರು ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆನು>> ಎಂದು ಹೇಳಿದನು.11ಯೋವಾಬನು ಅವನಿಗೆ, <<ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ತಲಾಂತು ಬೆಳ್ಳಿಯನ್ನು, ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು>> ಎಂದನು.12ಅದಕ್ಕೆ ಆ ಮನುಷ್ಯನು ಯೋವಾಬನಿಗೆ, <<ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ ನಾನು ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಗೂ ಮತ್ತು ಇತ್ತೈಗೂ, <ಜಾಗರೂಕತೆಯಿಂದಿರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು> ಎಂದು ಆಜ್ಞಾಪಿಸಿದ್ದಾನಲ್ಲವೇ?13ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ತಿಳಿಯದೆ ಇರುವುದಿಲ್ಲ. ಆಗ ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ>> ಎಂದು ಉತ್ತರ ಕೊಟ್ಟನು.14ಆಗ ಯೋವಾಬನು, <<ಇಲ್ಲಿ ನಿಂತು ತಡಮಾಡುವುದೇಕೆ>> ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ15ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದು ಹಾಕಿದರು.16ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ತುತ್ತೂರಿಯನ್ನು ಊದಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು.17ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.18ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ.ದಾವೀದನು ಮಗನಿಗಾಗಿ ಗೋಳಾಡಿದ್ದು
19ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, <<ಅಪ್ಪಣೆಯಾಗಲಿ ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭ ವರ್ತಮಾನವನ್ನು ತಿಳಿಸುವೆನು>> ಎಂದನು.20ಯೋವಾಬನು ಅವನಿಗೆ, <<ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ>> ಎಂದು ಹೇಳಿದನು.21ಯೋವಾಬನು ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, <<ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು>> ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟುಹೋದನು.22ಚಾದೋಕನ ಮಗನಾದ ಅಹೀಮಾಚನು ಪುನಃ ಯೋವಾಬನಿಗೆ, <<ಆಗಿದ್ದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡು>> ಎಂದು ಬೇಡಿಕೊಂಡನು. ಅದಕ್ಕೆ ಅವನು, <<ಮಗನೇ ಯಾಕೆ ಹೋಗಬೇಕೆನ್ನುತ್ತೀ? ಅದಕ್ಕಾಗಿ ನಿನಗೆ ಬಹುಮಾನ ಸಿಕ್ಕುವುದಿಲ್ಲವಲ್ಲಾ>> ಎಂದನು.23ಆಗ ಅಹೀಮಾಚನು ಪುನಃ <<ಚಿಂತೆಯಿಲ್ಲ ನನ್ನನ್ನು ಕಳುಹಿಸು>> ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು <<ಹೋಗು>> ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.24ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು.25ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು, <<ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು>> ಎಂದನು. ಆ ಮನುಷ್ಯನು ಬರಬರುತ್ತಾ ಸಮೀಪವಾದನು.26ಅಷ್ಟರಲ್ಲಿ ಕಾವಲುಗಾರರು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, <<ಇಗೋ, ಇನ್ನೊಬ್ಬನು ಒಬ್ಬಂಟಿಗನಾಗಿ ಬರುತ್ತಿದ್ದಾನೆ>> ಎಂದು ಅರಸನಿಗೆ ತಿಳಿಸಿದನು. ಆಗ ಅರಸನು, <<ಹಾಗಾದರೆ ಅವನೂ ಸಮಾಚಾರ ತರುವವನು>> ಎಂದು ಹೇಳಿದನು.27ಆಗ ಕಾವಲುಗಾರನು, <<ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ>> ಎಂದನು. ಅದಕ್ಕೆ ಅರಸನು, <<ಅವನು ಒಳ್ಳೆಯವನು, ಶುಭವರ್ತಮಾನ ತರುವವನು>> ಎಂದನು.28ಅಹೀಮಾಚನು ಹತ್ತಿರ ಬಂದು ಅರಸನಿಗೆ, <<ಶುಭವಾಗಲಿ>> ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, <<ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ>> ಎಂದನು.29ಆಗ ಅರಸನು ಅವನನ್ನು, <<ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ>> ಎಂದು ಕೇಳಿದನು. ಅದಕ್ಕೆ ಅಹೀಮಾಚನು, <<ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ>> ಎಂದು ಉತ್ತರಕೊಟ್ಟನು.30ಆಗ ಅರಸನು ಅವನಿಗೆ, <<ನೀನು ಇತ್ತ ನಿಲ್ಲು>> ಎಂದು ಆಜ್ಞಾಪಿಸಿದನು. ಅವನು ನಿಂತನು.31ಅಷ್ಟರಲ್ಲಿ ಕೂಷ್ಯನು ಬಂದು, <<ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ>> ಎಂದನು.32ಅರಸನು ಅವನನ್ನು, <<ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?>> ಎಂದು ಕೇಳಲು ಅವನು, <<ನನ್ನ ಒಡೆಯನಾದ ಅರಸನ ಶತ್ರುಗಳಿಗೂ, ಅವನಿಗೆ ಕೇಡು ಮಾಡುವುದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ>> ಎಂದು ಉತ್ತರ ಕೊಟ್ಟನು.33ಇದನ್ನು ಕೇಳಿ ಅರಸನು ಎದೆಯೊಡದವನಾಗಿ, <<ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!>> ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.
19ಯೋವಾಬನು ಅರಸನನ್ನು ಗದರಿಸಿದ್ದು
1ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.2ಅರಸನು ಮಗನಿಗೊಸ್ಕರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು.3ಜನರು ಆ ದಿನ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನದಿಂದ ಊರನ್ನು ಪ್ರವೇಶಿಸಿದರು.4ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, <<ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!>> ಎಂದು ಬಹಳವಾಗಿ ಗೋಳಾಡಿದನು.5ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, <<ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ.6ನೀನು ಶತ್ರುಗಳನ್ನು ಪ್ರೀತಿಸುವವನೂ, ಮಿತ್ರರನ್ನು ದ್ವೇಷಿಸುವವನೂ ಆಗಿದ್ದೀ. ನೀನು ನಿನ್ನ ಸೇನಾಧಿಪತಿಗಳನ್ನೂ, ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟೆ. ಇದರಿಂದ ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೆ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.7ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು>> ಎಂದು ಹೇಳಿದನು.ದಾವೀದನು ಪುನಃ ಯೆರೂಸಲೇಮಿಗೆ ಬಂದದ್ದು
8ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು.9ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ <<ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.10ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?>> ಎಂದು ಮಾತನಾಡಿಕೊಂಡರು.11ಇಸ್ರಾಯೇಲರು ಈ ಪ್ರಕಾರ ಮಾತನಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರಿಗೆ, <<ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ, <ಅರಸನಾದ ನನ್ನನ್ನು ತಿರುಗಿ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ತಡಮಾಡುತ್ತಿರುವುದೇಕೆ?12ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಿ. ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ತಡಮಾಡುತ್ತಿರುವುದು ಒಳ್ಳೆಯದಲ್ಲ> ಎಂದು ಹೇಳಿರಿ.13ಅಮಾಸನಿಗೆ, <ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ> ಎಂಬುದಾಗಿಯೂ ತಿಳಿಸಿರಿ>> ಎಂದು ಹೇಳಿ ಕಳುಹಿಸಿದನು.14ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, <<ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ>> ಎಂದು ಹೇಳಿಕಳುಹಿಸಿದರು.15ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೊರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.ದಾವೀದನು ಶಿಮ್ಮಿಯನ್ನು ಕ್ಷಮಿಸಿದ್ದು
16ಬೆನ್ಯಾಮೀನ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು.17ಅವನ ಜೊತೆಯಲ್ಲಿ ಸಾವಿರ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ, ಇಪ್ಪತ್ತು ಸೇವಕರನ್ನೂ ಕರೆದುಕೊಂಡು ಅರಸನ ಮುಂದೆಯೆ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು18ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ,19<<ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.20ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ>> ಎಂದು ಹೇಳಿದನು.21ಚೆರೂಯಳ ಮಗನಾದ ಅಬೀಷೈಯು, <<ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ>> ಎಂದನು.22ಅದಕ್ಕೆ ದಾವೀದನು, <<ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ಈ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು>> ಎಂದು ನುಡಿದನು.23ಅನಂತರ ಅರಸನು ಶಿಮ್ಮಿಗೆ, <<ನಿನಗೆ ಮರಣದಂಡನೆ ಆಗುವುದಿಲ್ಲ>> ಎಂದು ಪ್ರಮಾಣಮಾಡಿ ಹೇಳಿದನು.ದಾವೀದನು ಮೆಫೀಬೋಶೆತನಿಗೆ ತೋರಿದ ಕರುಣೆ
24ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುವವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.25ಇವನು ಯೆರೂಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, <<ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ?>> ಎಂದು ಕೇಳಿದನು.26ಅವನು, <<ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ <ಕತ್ತೆಗೆ ತಡಿಹಾಕು. ನಾನು ಕುಳಿತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು> ಎಂದು ಆಜ್ಞಾಪಿಸಿದೆನು.27ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ.28ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?>> ಎಂದು ಉತ್ತರ ಕೊಟ್ಟನು.29ಆಗ ಅರಸನು ಅವನಿಗೆ, <<ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು>> ಎಂದು ಹೇಳಿದನು.30ಅದಕ್ಕೆ ಮೆಫೀಬೋಶೆತನು, <<ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು>> ಎಂದನು.ದಾವೀದನು ಬರ್ಜಿಲ್ಲೈಗೆ ತೋರಿದ ದಯೆ
31ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಸಾಗಕಳುಹಿಸುವುದಕ್ಕಾಗಿ ರೋಗೆಲೀಮಿನಿಂದ ಯೊರ್ದನಿಗೆ ಬಂದಿದ್ದನು.32ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.33ಅರಸನು ಬರ್ಜಿಲ್ಲೈಗೆ, <<ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ, ನಾನು ಯೆರೂಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ>> ಎಂದನು.34ಅದಕ್ಕೆ ಬರ್ಜಿಲ್ಲೈಯು, <<ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ35ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು?36ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು?37ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ>> ಎಂದನು.38ಅದಕ್ಕೆ ಅರಸನು, <<ಕಿಮ್ಹಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತಿಯೋ ಅದೆಲ್ಲವನ್ನೂ ಮಾಡುತ್ತೇನೆ>> ಎಂದು ಹೇಳಿದನು.39ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.40ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ, ಇಸ್ರಾಯೇಲರಲ್ಲಿ ಅರ್ಧ ಜನರೂ ಅರಸನನ್ನು ಕರೆದುಕೊಂಡು ಹೋದರು.ಯೆಹೂದ್ಯರ ಮತ್ತು ಇಸ್ರಾಯೇಲರ ನಡುವೆ ವಾಗ್ವಾದ
41ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, <<ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?>> ಎಂದು ಕೇಳಿದರು.42ಅದಕ್ಕೆ ಯೆಹೂದ್ಯರು ಇಸ್ರಾಯೇಲರಿಗೆ, <<ಅರಸನು ನಮಗೆ ಸಮೀಪದ ಬಂಧು. ನೀವು ಅದಕ್ಕಾಗಿ ಕೋಪಗೊಳ್ಳುವುದೇಕೆ? ನಾವೇನು ಅರಸನ ಹಣದಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ?>> ಎಂದು ಉತ್ತರ ಕೊಟ್ಟರು.43ಆಗ ಇಸ್ರಾಯೇಲರು ಯೆಹೂದ್ಯರಿಗೆ, <<ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?>> ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.
20ಶೆಬನ ದಂಗೆ
1ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, <<ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ>> ಎಂದನು.2ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಯೊರ್ದನ್ ತಗ್ಗಿನಿಂದ ಯೆರೂಸಲೇಮಿನ ವರೆಗೂ ಅವನ ಜೊತೆಯಲ್ಲಿ ಹೋದರು.3ಅರಸನಾದ ದಾವೀದನು ಯೆರೂಸಲೇಮಿಗೆ ಬಂದ ಮೇಲೆ ತಾನು ಅರಮನೆ ಕಾಯುವುದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾಗಿ ಒಂದು ಮನೆಯಲ್ಲಿಟ್ಟು, ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಸಂಗಮಿಸಲಿಲ್ಲ. ಅವರು ಜೀವದಿಂದಿರುವವರೆಗೂ ವಿಧೆವೆಯರಂತಿದ್ದು ಕಾವಲಲ್ಲಿ ಇರಬೇಕಾಯಿತು.ಅಮಾಸನ ಕೊಲೆ
4ಅನಂತರ ಅರಸನು ಅಮಾಸನಿಗೆ, <<ನೀನು ಮೂರು ದಿನಗಳೊಳಗೆ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು>> ಎಂದು ಆಜ್ಞಾಪಿಸಿದನು.5ಅಮಾಸನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬಾರದೆ ತಡಮಾಡಿದ್ದರಿಂದ6ಅರಸನು ಅಬೀಷೈಗೆ, <<ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ಕರೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿಜಡಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು>> ಎಂದನು.7ಆಗ ಅವನು ಯೋವಾಬನ ಸೈನಿಕರನ್ನೂ, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳನ್ನೂ ಎಲ್ಲಾ ಶೂರರನ್ನೂ ಕರೆದುಕೊಂಡು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕೋಸ್ಕರ ಯೆರೂಸಲೇಮಿನಿಂದ ಹೊರಟರು.8ಅವರು ಗಿಬ್ಯೋನಿನಲ್ಲಿದ್ದ ದೊಡ್ಡ ಕಲ್ಲನ್ನು ಸಮೀಪಿಸಿದಾಗ ಅಮಾಸನು ಅವನೆದುರು ಬಂದನು. ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದ ಯೋವಾಬನೂ ಅವನನ್ನು ವಧಿಸುವುದಕ್ಕೆ ಹೋಗುತ್ತಿರುವಾಗ ಅವನ ಸೊಂಟಕ್ಕೆ ಕಟ್ಟಿದ ಕತ್ತಿಯೂ ಒರೆಯಿಂದ ಕೆಳಗೆ ಬಿದ್ದಿತು.9ಅವನು ಅಮಾಸನನ್ನು, <<ಸಹೋದರನೇ ಕ್ಷೇಮವೋ>> ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು,10ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,11ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು, <<ದಾವೀದ ಹಾಗೂ ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ>> ಎಂದು ಕೂಗಿದನು12ಮಾರ್ಗದ ಮಧ್ಯದಲ್ಲಿ ರಕ್ತದಲ್ಲಿ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಕಂಡ ಆ ಆಳು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಟ್ಟೆಯಿಂದ ಮುಚ್ಚಿದನು.13ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೊಸ್ಕರ ಯೋವಾಬನನ್ನು ಹಿಂಬಾಲಿಸಿದರು.ಶೆಬನ ಕೊಲೆ
14ಶೆಬನು ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಸಂಚರಿಸುತ್ತಾ ಆಬೇಲ್, ಬೇತ್ಮಾಕಾಕ್ಕೂ ಬಂದನು. ಬೇರಿಯರೆಲ್ಲರೂ ಸೇರಿಕೊಂಡು ಅವನೊಡನೆ ಆ ಊರನ್ನು ಸೇರಿದರು.15ಯೋವಾಬನ ಕಡೆಯವರು ಆಬೇಲ್ ಬೇತ್ಮಾಕಾಕ್ಕೆ ಊರಿಗೆ ಮುತ್ತಿಗೆ ಹಾಕಿ ಅದಕ್ಕೆ ಎದುರಾಗಿ ಊರು ಗೋಡೆಗೆ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ, ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.16ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬಳು ಹೆಂಗಸು ಅವರಿಗೆ, <<ಕೇಳಿರಿ, ದಯವಿಟ್ಟು ಕೇಳಿರಿ. ಯೋವಾಬನೊಂದಿಗೆ ನಾನು ಮಾತನಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ>> ಎಂದು ಕೂಗಿದಳು.17ಯೋವಾಬನು ಬರಲು ಆ ಸ್ತ್ರೀಯು, <<ನೀನು ಯೋವಾಬನೋ?>> ಎಂದು ಅವನನ್ನು ಕೇಳಲು ಅವನು <<ಹೌದು ನಾನೇ>> ಎಂದು ಉತ್ತರ ಕೊಟ್ಟನು. ಆಕೆಯು, <<ನಿನ್ನ ದಾಸಿಯ ಮಾತನ್ನು ಕೇಳು>> ಅನ್ನಲು ಅವನು, <<ಕೇಳುತ್ತೇನೆ>> ಎಂದನು.18ಆಗ ಆಕೆಯು, <<ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳೋಣ ಅಂದುಕೊಂಡು ಅವರ ಆಲೋಚನೆಯ ಮೇರೆಗೆ ತೀರ್ಮಾನವನ್ನು ತೆಗೆದುಕೊಳ್ಳುತ್ತಿದ್ದರು.19ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?>> ಎಂದಳು.20ಅದಕ್ಕೆ ಯೋವಾಬನು, <<ನುಂಗಿಬಿಡುವುದಾಗಲಿ, ಹಾಳುಮಾಡುವುದಾಗಲಿ ನನಗೆ ದೂರವಾಗಿರಲಿ ಅಂಥದ್ದು ಬೇಡವೇ ಬೇಡ.21ಎಫ್ರಾಯೀಮಿನ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬುವವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನ್ನನ್ನೇ ಒಪ್ಪಿಸಿರಿ, ನಾನು ಊರನ್ನು ಬಿಟ್ಟು ಹೋಗುತ್ತೇನೆ>> ಎಂದು ಹೇಳಿದನು. ಆ ಸ್ತ್ರೀಯು ಯೋವಾಬನಿಗೆ, <<ನೋಡು ಈಗಲೇ ಅವನ ತಲೆಯು ಗೋಡೆಯ ಕಿಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವುದು>> ಎಂದು ಉತ್ತರ ಕೊಟ್ಟು,22ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿ ಯೋವಾಬನಿದ್ದಲ್ಲಿಗೆ ಎಸೆದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇಮಿನಲ್ಲಿದ್ದ ಅರಸನ ಬಳಿಗೆ ಹೋದನು.ದಾವೀದನ ಆಸ್ಥಾನಿಕರು
23ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.24ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು. ಅಹೀಲೂದನ ಮಗನಾದ ಯೆಹೋಷಾಫಾಟನು ಮುಖ್ಯ ದಾಖಲೆಮಾಡುವ ಲೇಖಕ.25ಶೆವನು ಕಾರ್ಯದರ್ಶಿ, ಚಾದೋಕ್ ಮತ್ತು ಎಬ್ಯಾತಾರರು ಯಾಜಕರು.26ಯಾಯೀರಿನವನಾದ ಈರನೂ ದಾವೀದನ ಯಾಜಕನು.
21ಗಿಬ್ಯೋನ್ಯರು ಮುಯ್ಯಿ ತೀರಿಸಿದ್ದು
1ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, <<ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ>> ಎಂದು ಉತ್ತರ ಕೊಟ್ಟನು.2ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು.3ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, <<ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?>> ಎಂದು ಕೇಳಿದನು.4ಅದಕ್ಕೆ ಅವರು, <<ಸೌಲನ ಸಂತಾನದವರಿಗೂ ನಮಗೂ ಇರುವ ವ್ಯಾಜ್ಯವು ಬೆಳ್ಳಿ ಬಂಗಾರದಿಂದ ಮುಗಿಯಲಾರದು. ಇಸ್ರಾಯೇಲ್ಯರನ್ನು ಕೊಲ್ಲುವ ಅಧಿಕಾರವು ನಮಗಿಲ್ಲ>> ಎಂದು ಉತ್ತರ ಕೊಟ್ಟರು. ಆಗ ಅರಸನು ಅವರಿಗೆ, <<ಏನು ಮಾಡಬೇಕು ಹೇಳಿರಿ ಮಾಡುತ್ತೇನೆ>> ಅಂದನು.5ಆಗ ಅವರು, <<ನಮ್ಮನ್ನು ಇಸ್ರಾಯೇಲರ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ, ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು.6ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು>> ಎಂದರು. ಅದಕ್ಕೆ ಅರಸನು, <<ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ>> ಅಂದನು.7ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.8ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರಿಯೇಲನಿಗೆ ಸೌಲನ ಮಗಳಾದ ಮೀಕಲಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ಕರೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದರು.9ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಆರಂಭವಾಗಿತ್ತು10ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.11ಅಯ್ಯಾಹನ ಮಗಳೂ, ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ಗೊತ್ತಾಯಿತು.12ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೋಸ್ಕರ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ನೇತುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.13ದಾವೀದನು ಯಾಬೇಷಿನಲ್ಲಿದ್ದ ಸೌಲ ಮತ್ತು ಯೋನಾತಾನರ ಎಲುಬುಗಳನ್ನು ಗಿಬ್ಯೋನಿನಲ್ಲಿ ಹತರಾದವರ ಎಲುಬುಗಳನ್ನೂ ತೆಗೆದುಕೊಂಡರು.14ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.ದಾವೀದನ ಭಟರ ಶೂರಕೃತ್ಯಗಳು
15ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಪುನಃ ಯುದ್ಧವಾಯಿತು. ದಾವೀದನು ತನ್ನ ಸೇವಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.16ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೆಕಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.17ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, <<ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು>> ಎಂದು ಖಂಡಿತವಾಗಿ ಹೇಳಿದನು.18ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬುವನು ರೆಫಾಯನಾದ ಸೆಫ ಎಂಬುವನನ್ನು ಕೊಂದನು.19ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೇತ್ಲೆಹೇಮಿನವನಾದ ಯಾರೇಯೋರೆಗೀಮ್ ಎಂಬುವವನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.20ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು.21ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.22ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರೂ ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.
22ದಾವೀದನ ರಚಿಸಿದ ಸ್ತುತಿಗೀತೆ
1ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಜಯ ಗೀತೆಯನ್ನು ರಚಿಸಿ ಹೀಗೆ ಹಾಡಿದನು:
2ಯೆಹೋವನು ನನ್ನ ಬಂಡೆಯೂ, ನನ್ನ ಕೋಟೆಯೂ ನನ್ನ ವಿಮೋಚಕನೂ ಆಗಿದ್ದಾನೆ. 3ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.
4ಯೆಹೋವನು ಸ್ತೋತ್ರಕ್ಕೆ ಅರ್ಹನು. ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ. 5ಮರಣ ಪ್ರವಾಹದ ಅಲ್ಲಕಲ್ಲೋಲಗಳು ನನ್ನನ್ನು ಸುತ್ತಿಕೊಂಡವು. ನಾಶಪ್ರವಾಹವು ನನ್ನನ್ನು ನಡುಗಿಸಿತು.
6ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು, ಮರಣಕರವಾದ ಉರುಲುಗಳು ನನ್ನನ್ನು ಸುತ್ತಿಕೊಂಡವು. 7ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಸ್ವರವನ್ನು ಕೇಳಿದನು. ನನ್ನ ಪ್ರಾರ್ಥನೆ ಆತನ ಸನ್ನಿಧಿಗೆ ಕೇಳಿಸಿತು. 8ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು.
9ಆತನ ಮೂಗಿನಿಂದ ಹೊಗೆಯು ಬಂದಿತು. ಆತನ ಬಾಯಿಂದ ಅಗ್ನಿಜ್ವಾಲೆಯು ಹೊರಟು ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು. 10ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು. ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು.
11ಕೆರೂಬಿವಾಹನನಾಗಿ ಹಾರಿದನು. ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು.
12ಕತ್ತಲನ್ನೂ, ಜಲಮಯವಾಗಿರುವ ನೀಲಮೇಘಗಳನ್ನೂ, ತನ್ನ ಸುತ್ತಲೂ ಗುಡಾರದಂತೆ ಕವಿಸಿಕೊಂಡನು. 13ಆತನ ಸಾನ್ನಿಧ್ಯ ಪ್ರಕಾಶದಿಂದ ಉರಿಗೆಂಡಗಳು ಹೊರಟವು.
14ಯೆಹೋವನು ಆಕಾಶದಿಂದ ಗುಡುಗಿದನು. ಪರಾತ್ಪರನಾದ ದೇವರು ಧ್ವನಿಗೊಟ್ಟನು.
15ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದುರಿಸಿಬಿಟ್ಟನು. ಸಿಡಿಲಿನಿಂದ ಅವುಗಳನ್ನು ಕಳವಳಗೊಳಿಸಿದನು. 16ಆಗ ಯೆಹೋವನ ಗದರಿಕೆಯಿಂದಲೂ ಆತನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ಥಿವಾರವು ತೋರಿಬಂದವು. 17ಆತನು ಮೇಲಣಲೋಕದಿಂದ ಕೈಚಾಚಿ ನನ್ನನ್ನು ಹಿಡಿದು! ಮಹಾಜಲರಾಶಿಯೊಳಗಿಂದ ನನ್ನನ್ನು ಎಳೆದನು.
18ನನಗಿಂತ ಬಲಿಷ್ಠರೂ, ಪುಷ್ಠರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು. 19ಅವರು ನನ್ನ ಆಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು. ಆಗ ಯೆಹೋವನು ನನಗೆ ಉದ್ಧಾರಕನಾದನು.
20ಆತನು ನನ್ನನ್ನು ಅಪಾಯದಿಂದ ಬಿಡಿಸಿದನು. ನನ್ನನ್ನು ಮೆಚ್ಚಿ ರಕ್ಷಿಸಿದನು.
21ಯೆಹೋವನು ನನ್ನ ಸನ್ನಡತೆಗೆ ತಕ್ಕ ಪ್ರತಿಫಲ ನೀಡಿದನು. ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು. 22ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ ನನ್ನ ದೇವರನ್ನು ಬಿಟ್ಟು ದ್ರೋಹ ಮಾಡಲಿಲ್ಲ.
23ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನೆದುರಿನಲ್ಲಿ ಇಟ್ಟುಕೊಂಡೆನು. ಆತನ ವಿಧಿಗಳಿಂದ ತಪ್ಪಿ ಹೋಗಲಿಲ್ಲ. 24ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು. ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
25ಆದ್ದರಿಂದ ನನ್ನ ನೀತಿಗೆ ತಕ್ಕಂತೆಯೂ, ಆತನ ದೃಷ್ಟಿಯಲ್ಲಿ ನನ್ನ ನಿರಪರಾಧಕ್ಕೆ ತಕ್ಕಂತೆಯೂ ಯೆಹೋವನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು. 26ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವರಿಗೆ ನಿರ್ದೋಷಿಯೂ.
27ಶುದ್ಧನಿಗೆ ಪರಿಶುದ್ಧನೂ, ವಕ್ರಬುದ್ಧಿಯವನಿಗೆ ವಕ್ರನೂ ಆಗಿರುವಿ. 28ದೀನರನ್ನು ಉದ್ಧರಿಸುತ್ತಿ. ಹಮ್ಮಿನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತಿ.
29ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕನ್ನು ಕೊಟ್ಟು ನನ್ನ ಕತ್ತಲನ್ನು ಪರಿಹರಿಸುವನು. 30ನಿನ್ನ ಬಲದಿಂದ ನಾನು ದಂಡಿನ ಮೇಲೆ ಬೀಳುವೆನು. ನನ್ನ ದೇವರ ಸಹಾಯದಿಂದ ಪ್ರಾಕಾರಗಳನ್ನು ಹಾರುವೆನು.
31ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ. 32ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?
33ದೇವರು ನನ್ನ ಬಲವಾದ ಕೋಟೆಯಾಗಿದ್ದಾನೆ. ಆತನು ನನ್ನ ಮಾರ್ಗವನ್ನು ಸರಾಗಮಾಡುತ್ತಾನೆ. 34ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ. ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ
35ಆತನು ನನಗೆ ಯುದ್ಧ ವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು. 36ನೀನು ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಕೃಪಾಕಟಾಕ್ಷವು ನನ್ನನ್ನು ಉನ್ನತಕ್ಕೆ ಏರಿಸಿದೆ.
37ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಕಾಲುಗಳು ಕದಲುವುದಿಲ್ಲ. 38ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು. ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.
39ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು. ಅವರು ನನ್ನ ಪಾದದ ಕೆಳಗೆ ಬೀಳುವರು. 40ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದಿ. ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದಿ.
41ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ. ನನ್ನ ಶತ್ರುಗಳನ್ನು ನಿರ್ಮೂಲ ಮಾಡುವೆನು. 42ಅವರು ಸಹಾಯಕ್ಕಾಗಿ ಕೂಗಿಕೊಂಡರೂ ರಕ್ಷಿಸುವವನಿಲ್ಲ. ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
43ಭೂಮಿಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿ ಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು. 44ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದಿ. ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದಿ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
45ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು.
46ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು. 47ಯೆಹೋವನು ಚೈತನ್ಯಸ್ವರೂಪನು. ನನ್ನ ಶರಣನಿಗೆ ಸ್ತೋತ್ರ. ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ.
48ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು. ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.
49ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಂದ ತಪ್ಪಿಸಿ ಉನ್ನತಪಡಿಸುತ್ತಿ. ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತಿ. 50ಈ ಕಾರಣದಿಂದ ಯೆಹೋವನೇ, ಅನ್ಯಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ನಿನ್ನ ನಾಮವನ್ನು ಸಂಕೀರ್ತಿಸುವೆನು.
51ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ. ತಾನು ಅಭಿಷೇಕಿಸಿದ ದಾವೀದನಿಗೂ, ಅವನ ಸಂತತಿಯವರೆಗೆ ಸದಾಕಾಲವೂ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.
23ದಾವೀದನ ಕೊನೆಯ ಮಾತುಗಳು
1ದಾವೀದನ ಕೊನೆಯ ಮಾತುಗಳು -ಇಷಯನ ಮಗನಾದ ದಾವೀದನು,
ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು,
ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ,
ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು:
2<<ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು.ಆತನ ವಾಕ್ಯವು ನನ್ನ ಬಾಯಲ್ಲಿತ್ತು.
3ಇಸ್ರಾಯೇಲರ ಶರಣನೂ,ದೇವರೂ ಆಗಿರುವಾತನು ಹೇಳಿದ್ದೇನೆಂದರೆ,
ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,
4ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ,ಮೋಡಗಳನ್ನು ಚದುರಿಸಿಬಿಟ್ಟು,
ಮಳೆಬಿದ್ದ ಭೂಮಿಯಿಂದ ಹುಲ್ಲನ್ನು ಮೊಳೆಯಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.
5ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ?ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ?
ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ.
ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?
6ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ.ಅವುಗಳನ್ನು ಹಿಡಿಯಬೇಕೆಂದಿರುವವನು ತನ್ನ ಕೈಯಿಂದ ಹಿಡಿಯಲಾರದೆ,
7ಕಬ್ಬಿಣದ ಆಯುಧವನ್ನೂ, ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು.ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.>>
ದಾವೀದನ ರಣವೀರರ ಶೌರ್ಯಸಾಹಸಗಳು
8ದಾವೀದನೊಂದಿಗಿದ್ದ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷಬ್ ಬಷ್ಬೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.9ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.10ಇಸ್ರಾಯೇಲರು ಹೋದ ನಂತರ ಇವನು ನಿಂತುಕೊಂಡು, ಕತ್ತಿ ಹಿಡಿದು, ಕೈ ಸೋತು ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲರು ಸುಲಿದುಕೊಳ್ಳುವುದಕ್ಕಾಗಿ ಹಿಂದಿರುಗಿದರು.11ಮೂರನೆಯವನು ಹರಾರ್ಯನಾದ ಆಗೇಯನ ಮಗ ಶಮ್ಮ ಎಂಬುವವನು. ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದಿಯ ಹೊಲಕ್ಕೆ ಬಂದರು.12ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ, ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾಜಯವನ್ನುಂಟುಮಾಡಿದನು.13ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ ಸುಗ್ಗಿಕಾಲದಲ್ಲಿ ಅವನ ಬಳಿಗೆ ಮೂವರು ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಾಗ,14ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.15ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ <<ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು>> ಎಂದೂ ಕೇಳಿದನು.16ಕೂಡಲೇ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.17ಆದರೆ ಅವನು ಅದನ್ನು ಕುಡಿಯಲೊಲ್ಲದೆ, <<ಯೆಹೋವನೇ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ. ಜೀವದಾಶೆ ತೊರೆದವರ ರಕ್ತವನ್ನು ನಾನು ಕುಡಿಯಬೇಕೆ? ಇದನ್ನು ಕುಡಿಯುವುದೇ ಇಲ್ಲ>> ಎಂದು ಹೇಳಿ, ಅದನ್ನು ಯೆಹೋವನ ಮುಂದೆ ಹೊಯ್ದನು.ಆ ಮೂರು ಜನರು ಪರಾಕ್ರಮಶಾಲಿಗಳಾಗಿದ್ದರು.
18ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು.19ಅ ಮೂವರಲ್ಲಿ ಘನತೆಯುಳ್ಳವನೂ, ನಾಯಕನೂ ಇವನೇ. ಇವನು ಮೊದಲಿನ ಮೂರು ಜನರಿಗಿಂತ ಹೆಚ್ಚು ಪ್ರಸಿದ್ಧನಾಗಿದ್ದನಲ್ಲವೇ?20ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.21ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.22ಈ ಪರಾಕ್ರಮದ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.23ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ, ಮೊದಲಿನ ಮೂವರು ಸೈನಿಕರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.24ಮೂವತ್ತು ಮಂದಿ ರಣವೀರರ ಪಟ್ಟಿ- ಯೋವಾಬನ ತಮ್ಮನಾದ ಅಸಾಹೇಲನು,25ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನಾನ್, ಹರೋದಿನವರಾದ ಶಮ್ಮ ಮತ್ತು ಎಲೀಕರು.26ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ,27ಅಣತೋತಿನವನಾದ ಅಬೀಯೆಜೆರ್, ಹುಷಾ ಊರಿನವನಾದ ಮೆಬುನ್ನೈ,28ಅಹೋಹಿನವನಾದ ಚಲ್ಮೋನ್, ನೆಟೋಫದವನಾದ ಮಹರೈ,29ನೆಟೋಫದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ,30ಪಿರಾತೋನ್ಯನಾದ ಬೆನಾಯ, ನಹಲೇ ಗಾಷಿನವನಾದ ಹಿದ್ದೈ.31ಅರಾಬಾ ತಗ್ಗಿನವನಾದ ಅಬೀ ಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತ್,32ಶಾಲ್ಬೋನ್ಯನಾದ ಎಲೆಯಖ್ಬಾ, ಯಾಷೇನನ ಮಕ್ಕಳು, ಯೋನಾತಾನನು,33ಹರಾರ್ಯನಾದ ಶಮ್ಮ, ಅರಾರ್ಯನಾದ ಶಾರಾರನ ಮಗ ಅಹೀಯಾಮ್,34ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ ಎಂಬುವನ ಮಗನಾದ ಎಲೀಯಾಮ್,35ಕರ್ಮೆಲ್ಯನಾದ ಹೆಚ್ರೋ, ಅರ್ಬೀಯನಾದ ಪಾರೈ,36ಚೋಬ ಊರಿನ ನಾತಾನ ಎಂಬುವನ ಮಗನಾದ ಇಗಾಲ್, ಗಾದ್ಯನಾದ ಬಾನೀ,37ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ38ಇತ್ರೀಯರಾದ ಈರಾ ಮತ್ತು ಗಾರೇಬರು,39ಹಿತ್ತಿಯನಾದ ಊರೀಯ, ಒಟ್ಟಿಗೆ ಮೂವತ್ತೇಳು ಮಂದಿ. 24ಜನಗಣತಿಯು ಅದರ ಫಲವು
1ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.2ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, <<ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ>> ಎಂದು ಅವನಿಗೆ ಆಜ್ಞಾಪಿಸಿದನು.3ಆಗ ಯೋವಾಬನು ಅರಸನಿಗೆ, <<ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?>> ಅಂದನು.4ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.5ಅವರು ಯೊರ್ದನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ಯಗ್ಜೇರಿಗೂ,6ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೂಜೀ ಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.7ಅಲ್ಲಿಂದ ಚೀದೋನ್ ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.8ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿನಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿ ಬಂದರು.9ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು - ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದ್ಯರಲ್ಲಿ ಐದು ಲಕ್ಷ.10ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, <<ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು>> ಎಂದು ಪ್ರಾರ್ಥಿಸಿದನು.11ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ,12<<ನೀನು ದಾವೀದನ ಬಳಿ ಹೋಗಿ ಅವನಿಗೆ, <ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಟ್ಟಿದ್ದೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ> ಎಂಬುದಾಗಿ ಹೇಳು>> ಎಂದು ಆಜ್ಞಾಪಿಸಿದನು.13ಆಗ ಗಾದನು ದಾವೀದನ ಬಳಿಗೆ ಹೋಗಿ, <<ನಿನ್ನ ದೇಶದಲ್ಲಿ ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು>> ಎಂದನು.14ಅದಕ್ಕೆ ದಾವೀದನು ಗಾದನಿಗೆ, <<ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು>> ಎಂದು ಹೇಳಿದನು.15ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.16ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, <<ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ>> ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.17ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, <<ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ>> ಎಂದು ಬೇಡಿಕೊಂಡನು.ದಾವೀದನು ಯಜ್ಞವೇದಿಯನ್ನು ಕಟ್ಟಿಸಿದ್ದು
18ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, <<ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು>> ಎಂದು ಹೇಳಿದನು.19ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.20ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು.21ಅವನು, <<ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವುದಕ್ಕೆ ಕಾರಣವೇನು?>> ಎಂದು ಕೇಳಿದನು. ದಾವೀದನು ಅವನಿಗೆ, <<ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟುವುದಕ್ಕೆ ಬಂದಿದ್ದೇನೆ>> ಎಂದು ಉತ್ತರಕೊಟ್ಟನು.22ಆಗ ಅರೌನನು ದಾವೀದನಿಗೆ, <<ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ, ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ನೊಗ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.23ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ>> ಎಂದು ಹೇಳಿದನು.24ಅರಸನು ಅರೌನನಿಗೆ, <<ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ>> ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು.25ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.
1 ಅರಸುಗಳು
1ದಾವೀದನ ವೃದ್ಧಾಪ್ಯ
1ಅರಸನಾದ ದಾವೀದನು ವಯೋವೃದ್ಧನಾಗಿದ್ದನು. ಸೇವಕರು ಎಷ್ಟು ಕಂಬಳಿ ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.2ಆದುದರಿಂದ ಅವನ ಸೇವಕರು ಅವನಿಗೆ, <<ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕಿತರುವೆವು. ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ನಿನ್ನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಪಕ್ಕದಲ್ಲಿ ಮಲಗುವುದರಿಂದ ನಿಮಗೆ ಬೆಚ್ಚಗಾಗುವುದು>> ಎಂದು ಹೇಳಿದರು.3ಆನಂತರ ಅವರು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಅತಿ ಸುಂದರಿಯಾದ ಹುಡುಗಿಯನ್ನು ಹುಡುಕುವುದಕ್ಕೆ ಹೋಗಿ ಶೂನೇಮ್ ಊರಿನ ಅಬೀಷಗ್ ಎಂಬಾಕೆಯನ್ನು ಕಂಡು ಆಕೆಯನ್ನು ಅರಸನ ಬಳಿಗೆ ಕರೆದುಕೊಂಡು ಬಂದರು.4ಬಹು ಸುಂದರಿಯಾದ ಈಕೆಯು ಅರಸನನ್ನು ಶುಶ್ರೂಷೆ ಮಾಡುವ ಸೇವಕಿಯಾದಳು. ಆದರೆ ಅರಸನು ಈಕೆಯನ್ನು ಸಂಗಮಿಸಲಿಲ್ಲ.ಅದೋನೀಯನು ಅರಸನಾಗುವುದಕ್ಕೆ ಪ್ರಯತ್ನಿಸಿದ್ದು
5ಆನಂತರ ಹಗ್ಗೀತಳ ಮಗನಾದ ಅದೋನೀಯನು, <<ನಾನೇ ಅರಸನಾಗತಕ್ಕವನು>> ಎಂಬುದಾಗಿ ಹೇಳಿ ಉಬ್ಬಿಕೊಂಡು, ತನಗೋಸ್ಕರ ರಥರಥಾಶ್ವಗಳನ್ನೂ, ಮುಂದೆ ಓಡುವುದಕ್ಕಾಗಿ ಐವತ್ತು ಸಿಪಾಯಿಗಳನ್ನೂ ನೇಮಿಸಿಕೊಂಡನು.6ಅವನ ತಂದೆಯಾದ ದಾವೀದನು, <<ನೀನು ಹೀಗೆ ಮಾಡಿದ್ದೇಕೆ>> ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿ ಬೇಸರಪಡಿಸಿರಲಿಲ್ಲ. ಅವನು ಬಹು ಸುಂದರವಾಗಿದ್ದನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನಾಗಿದ್ದನು.7ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು.8ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ದಾವೀದನ ವಿಶೇಷ ಕಾವಲಿನವರು ಅದೋನೀಯನನ್ನು ಬೆಂಬಲಿಸಲಿಲ್ಲ.9ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಲ್ಲಿರುವ ಚೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ರಾಜಪುತ್ರರಾದ ತನ್ನ ಉಳಿದ ಸಹೋದರರನ್ನೂ ಅರಸನ ಅಧಿಕಾರಿಗಳಾದ ಎಲ್ಲಾ ಯೆಹೂದ್ಯರನ್ನೂ ಔತಣಕ್ಕೆ ಆಮಂತ್ರಿಸಿದನು.10ಆದರೆ ಪ್ರವಾದಿಯಾದ ನಾತಾನ್, ಬೆನಾಯ, ದಾವೀದನ ವಿಶೇಷ ಕಾವಲಿನವರು ತಮ್ಮನಾದ ಸೊಲೊಮೋನ್ ಇವರನ್ನು ಮಾತ್ರ ಆಮಂತ್ರಿಸಿರಲಿಲ್ಲ.11ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ, <<ಹಗ್ಗೀತಳ ಮಗನಾದ ಅದೋನೀಯನು ನಮ್ಮ ಒಡೆಯನಾದ ದಾವೀದನಿಗೆ ತಿಳಿಯದೇ ಅರಸನಾದನೆಂಬುದನ್ನು ನೀನು ಕೇಳಿದಿಯಲ್ಲವೋ?12ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.13ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, <ನನ್ನ ಒಡೆಯನಾದ ಅರಸನು ತನ್ನ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು. ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣ ಮಾಡಿ ಹೇಳಿದ್ದನಲ್ಲಾ. ಹೀಗಿದ್ದ ಮೇಲೆ ಅದೋನೀಯನು ಆಳುವುದೇಕೆ> ಎಂದು ಕೇಳು.14ನೀನು ಅರಸನೊಡನೆ ಮಾತನಾಡುತ್ತಿರುವಾಗ ನಾನು ಬಂದು ನಿನ್ನ ಮಾತನ್ನು ದೃಢಪಡಿಸುವೆನು>> ಎಂದನು.15ಅರಸನು ಬಹು ವೃದ್ಧನಾಗಿದುದರಿಂದ ಶೂನೇಮ್ಯಳಾದ ಅಬೀಷಗ್ ಎಂಬಾಕೆಯಿಂದ ಪರಾಂಬರಿಕೆಯನ್ನು ಹೊಂದುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತಿದ್ದನು.16ಬತ್ಷೆಬೆಯು ಅಲ್ಲಿಗೆ ಹೋಗಿ ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನು, <<ನಿನಗೇನು ಬೇಕು?>> ಎಂದು ಆಕೆಯನ್ನು ಕೇಳಿದನು.17ಆಗ ಆಕೆಯು, <<ನನ್ನ ಒಡೆಯನು ತನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ತಮ್ಮ ದಾಸಿಯಾದ ನನಗೆ ನನ್ನ ತರುವಾಯ ನನ್ನ ಮಗನಾದ ಸೊಲೊಮೋನನು ಅರಸನಾಗಬೇಕು. ನಿಜವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂಬುದಾಗಿ ಹೇಳಿದ್ದೆಯಲ್ಲಾ.18ಆದರೆ ಈಗ ಅದೋನೀಯನು ನನ್ನ ಒಡೆಯನೂ ಅರಸನೂ ಆದ ನಿಮಗೆ ತಿಳಿಯದೇ ಅರಸನಾಗಿದ್ದಾನೆ.19ಆತನು ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ, ಯಾಜಕನಾದ ಎಬ್ಯಾತಾರನನ್ನೂ, ಸೇನಾಧಿಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ.20ನನ್ನ ಒಡೆಯನೂ ಅರಸನೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನೀವೇ ಗೊತ್ತುಮಾಡಬೇಕೆಂದು ಇಸ್ರಾಯೇಲರೆಲ್ಲರೂ ಕಾದುಕೊಂಡಿದ್ದಾರೆ.21ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು>> ಎಂದು ಹೇಳಿದಳು.22ಆಕೆಯು ಹೀಗೆ ಅರಸನ ಸಂಗಡ ಮಾತನಾಡುವಷ್ಟರಲ್ಲಿ ಪ್ರವಾದಿಯಾದ ನಾತಾನನು ಬಂದನು.23ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ಪ್ರವಾದಿಯಾದ ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗನಮಸ್ಕಾರಮಾಡಿದನು.24ನಾತಾನನು, <<ನನ್ನ ಒಡೆಯನೂ, ಅರಸನೂ ಆದ ನೀನು ಅದೋನೀಯನಿಗೆ ಅರಸನಾಗುವುದಕ್ಕೆ ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ.25ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, <ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ> ಎಂದು ಕೂಗುತ್ತಿದ್ದಾರೆ.26ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ ನಿನ್ನ ಮಗನೂ, ಸೇವಕನೂ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ.27ಈ ಕಾರ್ಯವು ನನ್ನ ಒಡೆಯನೂ ಅರಸನೂ ಆದ ನಿನ್ನಿಂದಲೇ ನಡೆದಿರುವ ಪಕ್ಷದಲ್ಲಿ ನಿನ್ನ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರು ಎಂಬುವುದನ್ನು ನಿನ್ನ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ>> ಎಂದು ಹೇಳಿದನು.ಸೊಲೊಮೋನನ ರಾಜಾಭಿಷೇಕ
28ಅರಸನಾದ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆಯು ಬಂದು ಅರಸನ ಮುಂದೆ ನಿಂತಳು.29ಅರಸನು ಆಕೆಗೆ, <<ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಯೆಹೋವನಾಣೆ,30ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾದ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕೆಂದು ನಾನು ನಿನಗೆ ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದನ್ನು ಈಹೊತ್ತೇ ನೆರವೇರಿಸುವೆನು>> ಎಂದನು.31ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ, <<ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲವೂ ಬಾಳಲಿ>> ಎಂದಳು.32ಅನಂತರ ಅರಸನಾದ ದಾವೀದನು ತನ್ನ ಸೇವಕರಿಗೆ, <<ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನು ಕರೆಯಿರಿ>> ಎಂದು ಆಜ್ಞಾಪಿಸಿದನು. ಅವರು ಅರಸನ ಸನ್ನಿಧಿಗೆ ಬಂದರು.33ಅರಸನು ಅವರಿಗೆ, <<ನೀವು ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.34ಅಲ್ಲಿ ಯಾಜಕನಾದ ಚಾದೋಕನೂ ಮತ್ತು ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರೂ, <ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ> ಎಂದು ಜಯಘೋಷ ಮಾಡಲಿ.35ಆಮೇಲೆ ನೀವು ಅವನ ಹಿಂದೆ ಬನ್ನಿರಿ. ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಾಯೇಲರ ಮತ್ತು ಯೆಹೂದ್ಯರನ್ನು ಆಳಲು ಅವನನ್ನೇ ಪ್ರಭುವನ್ನಾಗಿ ನೇಮಿಸಿದ್ದೇನೆ>> ಎಂದನು.36ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ, <<ಹಾಗೆಯೇ ಆಗಲಿ. ನನ್ನ ಒಡೆಯನಾದ ಅರಸನ ದೇವರಾದ ಯೆಹೋವನು ಅದನ್ನು ಸ್ಥಿರಪಡಿಸಲಿ.37ಆತನು ನನ್ನ ಒಡೆಯನಾದ ಅರಸನ ಸಂಗಡ ಇದ್ದ ಪ್ರಕಾರ ಸೊಲೊಮೋನನ ಸಂಗಡಲೂ ಇದ್ದು ರಾಜ್ಯವನ್ನು ನನ್ನ ಒಡೆಯನೂ, ಅರಸನೂ ಆದ ನಿನ್ನ ಕಾಲದಲ್ಲಿದ್ದದಕ್ಕಿಂತ ಅಭಿವೃದ್ಧಿಮಾಡಲಿ>> ಎಂದು ನುಡಿದನು.38ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.39ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೇ ಕೊಂಬನ್ನೂದಿ ಎಲ್ಲಾ ಜನರು <<ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ>> ಎಂದು ಆರ್ಭಟಿಸಿದರು.40ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು.41ಅದೋನೀಯನು ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ, <<ಪಟ್ಟಣದಲ್ಲಿ ಇಂಥ ಗದ್ದಲವೇಕೆ?>> ಎಂದು ವಿಚಾರಿಸಿದನು.42ಆಗ ಯಾಜಕನಾದ ಎಬ್ಯಾತಾರನ ಮಗನಾದ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು ಅವನಿಗೆ, <<ಬಾ ನೀನು ಯೋಗ್ಯ ಪುರುಷನೂ, ಶುಭವರ್ತಮಾನವನ್ನು ತರುವವನೂ ಆಗಿರುತ್ತೀ>> ಎಂದನು.43ಯೋನಾತಾನನು ಅವನಿಗೆ, <<ಶುಭವಾರ್ತೆ ಎಲ್ಲಿ? ನಮ್ಮೊಡೆಯನೂ, ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.44ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್ ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ, ಕೆರೇತ್ಯ ಮತ್ತು ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.45ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕ ಮಾಡಿದರು. ಅಲ್ಲಿಂದ ಅವರು ಮಹಾ ಸಂತೋಷದಿಂದ ಜಯಘೋಷ ಮಾಡುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ. ನೀವು ಕೇಳಿದ ಶಬ್ದವು ಇದೇ.46ಇದಲ್ಲದೆ ಸೊಲೊಮೋನನು ರಾಜಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.47ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ, ಅರಸನೂ ಆದ ದಾವೀದನ ಮುಂದೆ ಬಂದು, <ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿ ಇದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ> ಎಂದು ಅವನನ್ನು ಹರಿಸಿದ್ದಾರೆ.48ಅರಸನು ತನ್ನ ಹಾಸಿಗೆಯ ಮೇಲೆ ಬಾಗಿಕೊಂಡು, <ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ> ಎಂದು ಹೇಳಿದ್ದಾನೆ>> ಅಂದರು.49ಆಗ ಅದೋನೀಯನಿಂದ ಔತಣಕ್ಕೆ ಕರೆಯಲ್ಪಟ್ಟವರೆಲ್ಲರೂ ಭಯಪಟ್ಟು ತಮ್ಮ ತಮ್ಮ ಮನೆಗಳಿಗೆ ಹೊರಟುಹೋದರು.50ಅದೋನೀಯನು ಸೊಲೊಮೋನನಿಗೆ ಹೆದರಿ ಹೊರಟುಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು .51ದೂತರು ಬಂದು ಸೊಲೊಮೋನನಿಗೆ, <<ಅದೋನೀಯನು ನಿನಗೆ ಹೆದರಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದು, <ಅರಸನಾದ ಸೊಲೊಮೋನನು ನನ್ನನ್ನು ಕತ್ತಿಯಿಂದ ಸಂಹರಿಸುವುದಿಲ್ಲವೆಂಬುದಾಗಿ ಈ ಹೊತ್ತು ನನಗೆ ಪ್ರಮಾಣಮಾಡಬೇಕೆಂದು ಬೇಡಿಕೊಳ್ಳುತ್ತೇನೆ> >> ಎಂಬುದಾಗಿ ತಿಳಿಸಿದನು.52ಅವನು, <<ಅದೋನೀಯನು ಯೋಗ್ಯತೆಯುಳ್ಳವನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ. ಆದರೆ ಅವನಲ್ಲಿ ಕೆಟ್ಟತನವು ಕಂಡುಬರುವುದಾದರೆ ಅವನು ಸಾಯುವನು>> ಎಂದು ಹೇಳಿ ಆಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ಕರೆಯಿಸಿದನು.53ಅವನು ಬಂದಾಗ ಅರಸನಾದ ಸೊಲೊಮೋನನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಅವನ ಮನೆಗೆ ಹೋಗಲು ಅಪ್ಪಣೆಕೊಟ್ಟನು.
2ದಾವೀದನು ಸೊಲೊಮೋನನಿಗೆ ಕೊಟ್ಟ ಕೊನೆಯ ಆದೇಶ
1ದಾವೀದನಿಗೆ ಮರಣದ ಸಮಯ ಸಮೀಪಿಸಿದಾಗ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ,2<<ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು.3ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.4ಮತ್ತು ಯೆಹೋವನು, <ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು> ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,5ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವುದನ್ನು ಬಲ್ಲೆಯಲ್ಲಾ ಅವನು ಇಬ್ಬರು ಇಸ್ರಾಯೇಲರ ಸೇನಾಧಿಪತಿಗಳಾದ ನೇರನ ಮಗನಾದ ಅಬ್ನೇರನನ್ನೂ ಮತ್ತು ಯೆತೆರನ ಮಗನಾದ ಅಮಾಸನನ್ನೂ ಕೊಂದುಹಾಕಿದನು. ಯುದ್ಧ ಕಾಲದಲ್ಲಿಯೋ ಎಂಬಂತೆ ಸಮಾಧಾನ ಕಾಲದಲ್ಲಿಯೂ ರಕ್ತಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.6ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.7ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.8ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮೀಯು ನಿನ್ನ ಬಳಿಯಲ್ಲಿರುತ್ತಾನಲ್ಲಾ. ನಾನು ಮಹನಯಿಮಿಗೆ ಹೋದಾಗ ಅವನು ನನ್ನನ್ನು ಬಹು ಕ್ರೂರವಾಗಿ ಶಪಿಸಿದನು. ಅವನು ನನ್ನನ್ನು ಎದುರುಗೊಳ್ಳುವುದಕ್ಕೆ ಯೊರ್ದನಿಗೆ ಬಂದಾಗ ನಾನು ಅವನಿಗೆ, <ನಿನ್ನನ್ನು ಕತ್ತಿಯಿಂದ ಕೊಲ್ಲುವುದಿಲ್ಲ> ಎಂದು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದೆನು.9ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ>> ಎಂದು ಹೇಳಿದನು.ದಾವೀದನ ಮರಣ
10ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.11ದಾವೀದನು ಇಸ್ರಾಯೇಲರನ್ನು ಆಳಿದ್ದು ಒಟ್ಟು ನಲ್ವತ್ತು ವರ್ಷ. ಹೇಗೆಂದರೆ, ಹೆಬ್ರೋನಿನಲ್ಲಿ ಏಳು ವರ್ಷ ಮತ್ತು ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳ್ವಿಕೆ ಮಾಡಿದನು.12ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯವು ಬಹಳವಾಗಿ ಬಲಗೊಂಡಿತು.ಸೊಲೊಮೋನನು ರಾಜಕಂಟಕರನ್ನು ಶಿಕ್ಷಿಸಿದ್ದು
13ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆಯು ಅವನನ್ನು, <<ನೀನು ಸಮಾಧಾನದಿಂದ ಬಂದಿರುವೆಯೋ?>> ಎಂದು ಕೇಳಿದಳು. ಅವನು, <<ಹೌದು ಸಮಾಧಾನದಿಂದ ಬಂದೆನು>> ಎಂದನು.14ಆಮೇಲೆ ಅವನು, <<ನಿನಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ>> ಎಂದನು. ಅದಕ್ಕೆ ಆಕೆಯು, <<ಹೇಳು>> ಎಂದಳು.15ಆಗ ಅವನು, <<ಈ ರಾಜ್ಯವು ನನಗೆ ಬರಬೇಕಾಗಿತ್ತು. ನಾನೇ ಅರಸನಾಗುವೆನೆಂದು ಇಸ್ರಾಯೇಲರೆಲ್ಲರೂ ಎದುರುನೋಡುತ್ತಿದ್ದರೆಂಬುದು ನೀನು ಬಲ್ಲೆಯಷ್ಟೇ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು. ಅದಿರಲಿ, ಒಂದು ಬಿನ್ನಹವಿದೆ.16ಅದನ್ನು ತಿರಸ್ಕರಿಸಬೇಡ>> ಎನ್ನಲು ಆಕೆಯು, <<ಅದೇನು ಹೇಳು>> ಎಂದಳು.17ಆಗ ಅವನು, <<ದಯವಿಟ್ಟು ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸನಾದ ಸೊಲೊಮೋನನಿಗೆ ಹೇಳು. ಅವನು ನಿನ್ನ ಮಾತನ್ನು ತಳ್ಳಿಹಾಕುವುದಿಲ್ಲ>> ಎಂದನು.18ಆಗ ಬತ್ಷೆಬೆಯು, <<ಒಳ್ಳೇಯದು, ನಾನು ನಿನಗೋಸ್ಕರ ಅರಸನ ಸನ್ನಿಧಿಯಲ್ಲಿ ಅರಿಕೆಮಾಡುತ್ತೇನೆ>> ಎಂದು ಹೇಳಿದಳು.19ಆಕೆಯು ಅದೋನೀಯನಿಗಾಗಿ ಮಾತನಾಡುವುದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು, ರಾಜ ಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.20ಆಗ ಆಕೆಯು, <<ಒಂದು ಸಣ್ಣ ಬಿನ್ನಹ ಉಂಟು. ಅದನ್ನು ತಿರಸ್ಕರಿಸಬೇಡ>> ಎಂದು ಹೇಳಿದಳು. ಅರಸನು, <<ನನ್ನ ತಾಯಿಯೇ ಏನು ಬೇಕು ಕೇಳು, ನಾನು ಆಗದು ಅನ್ನುವುದಿಲ್ಲ>> ಎಂದನು.21ಆಗ ಆಕೆಯು, <<ಶೂನೇಮ್ಯಳಾದ ಅಬೀಷಗ್ ಎಂಬಾಕೆಯು ನಿನ್ನ ಅಣ್ಣನಾದ ಅದೋನೀಯನಿಗೆ ಮದುವೆ ಮಾಡಿಕೊಡು>> ಎಂದಳು.22ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ, <<ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವುದೇಕೆ ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು. ಅವನು ನನ್ನ ಅಣ್ಣನಲ್ಲವೇ. ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ>> ಎಂದು ಉತ್ತರಕೊಟ್ಟನು.23ಇದಲ್ಲದೆ ಅರಸನಾದ ಸೊಲೊಮೋನನು, <<ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.24ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಬಲಪಡಿಸಿ, ತಾನು ವಾಗ್ದಾನ ಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈ ಹೊತ್ತೇ ಸಾಯಬೇಕು>> ಎಂದು ಹೇಳಿದನು.25ಆಮೇಲೆ ಅರಸನು ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದ್ದರಿಂದ ಅವನು ಹೋಗಿ ಅದೋನೀಯನನ್ನು ಹೊಡೆದು ಕೊಂದುಹಾಕಿದನು.ಎಬ್ಯಾತಾರನು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟದ್ದು
26ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ, <<ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದುದ್ದರಿಂದ ಈ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ>> ಎಂದು ಹೇಳಿದನು.27ಸೊಲೊಮೋನನು ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತೆಗೆದುಹಾಕಿದನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು.ಯೋವಾಬನ ಮರಣ
28ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.29ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಹತ್ತಿರ ಇದ್ದಾನೆ ಎಂಬ ಸುದ್ದಿಯು ಅರಸನಾದ ಸೊಲೊಮೋನನಿಗೆ ತಲುಪಿದಾಗ ಅವನು ಯೆಹೋಯಾದಾವನ ಮಗನಾದ ಬೆನಾಯನಿಗೆ, <<ಹೋಗಿ ಅವನನ್ನು ಕೊಂದು ಹಾಕು>> ಎಂದು ಆಜ್ಞಾಪಿಸಿದನು.30ಬೆನಾಯನು ಯೆಹೋವನ ಗುಡಾರಕ್ಕೆ ಹೋಗಿ ಯೋವಾಬನಿಗೆ, <<ಅರಸನು ನಿನಗೆ ಹೊರಗೆ ಬರಬೇಕೆಂದು ಆಜ್ಞಾಪಿಸುತ್ತಾನೆ>> ಎಂದು ಹೇಳಲು ಅವನು <<ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ>> ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.31ಅದಕ್ಕೆ ಅರಸನು ಅವನಿಗೆ, <<ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.32ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.33ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ>> ಎಂದನು.34ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವವನ್ನು ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು.35ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.ಶಿಮ್ಮೀಯ ಮರಣ
36ತರುವಾಯ ಅರಸನು ಶಿಮ್ಮೀಯನ್ನು ಕರೆಸಿ ಅವನಿಗೆ, <<ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇಮಿನಲ್ಲಿ ವಾಸಮಾಡಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.37ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು>> ಎಂದು ಹೇಳಿದನು.38ಅದಕ್ಕೆ ಶಿಮ್ಮೀಯು, <<ಒಳ್ಳೇಯದು ನನ್ನ ಒಡೆಯನು ಅರಸನೂ ಆದ ನೀನು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು>> ಎಂದು ಉತ್ತರಕೊಟ್ಟು ಬಹುದಿನಗಳ ವರೆಗೂ ಯೆರೂಸಲೇಮಿನಲ್ಲೇ ವಾಸಮಾಡುತ್ತಿದ್ದನು.39ಮೂರು ವರ್ಷಗಳಾದನಂತರ ಶಿಮ್ಮೀಯ ಇಬ್ಬರು ದಾಸರು ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ದಾಸರು ಗತ್ ಊರಿನಲ್ಲಿರುವುದು ಶಿಮ್ಮೀಗೆ ಗೊತ್ತಾಯಿತು.40ಆಗ ಅವನು ಕತ್ತೆಗೆ ತಡಿಹಾಕಿಸಿ ತನ್ನ ದಾಸರನ್ನು ಹುಡುಕುವುದಕ್ಕಾಗಿ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೊರಟು ಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು.41ಶಿಮ್ಮೀಯು ಯೆರೂಸಲೇಮಿನಿಂದ ಗತ್ ಊರಿಗೆ ಬಂದ ಸಂಗತಿಯು ಅರಸನಾದ ಸೊಲೊಮೋನನಿಗೆ ತಿಳಿದುಬಂದಾಗ ಅವನು ಅವನನ್ನು ಕರೆಸಿ ಅವನಿಗೆ,42<<ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣ ಶಿಕ್ಷೆಯಾಗುವುದು ಎಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡೆನಲ್ಲವೋ? ಆಗ, <ನೀನು ಹೇಳುವುದು ಒಳ್ಳೇಯದು, ಹಾಗೆಯೇ ಮಾಡುತ್ತೇನೆ> ಎಂದು ಹೇಳಿದಿಯಲ್ಲಾ.43ಹಾಗಾದರೆ ಯೆಹೋವನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ನೀನು ಯಾಕೆ ಕೈಕೊಳ್ಳಲಿಲ್ಲ>> ಎಂದನು.44ಇದಲ್ಲದೆ ಅರಸನು ಶಿಮ್ಮೀಗೆ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಮಾಡಿದ ಪಾಪಕ್ಕೆ ನಿನ್ನ ಮನವೇ ಸಾಕ್ಷಿ. ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.45ಆದರೆ ಸೊಲೊಮೋನ ರಾಜನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವನ ಸನ್ನಿಧಿಯಲ್ಲಿ ಸದಾಕಾಲವು ಸ್ಥಿರವಾಗಿಯೂ ಇರಲಿ ಎಂದು ಹೇಳಿ,46ಯೆಹೋಯಾದಾವನ ಮಗನಾದ ಬೆನಾಯನಿಗೆ, <<ಅವನನ್ನು ಸಂಹರಿಸು>> ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.
3ಸೊಲೊಮೋನನಿಗೆ ಯೆಹೋವನಿಂದ ವಿಶೇಷ ಜ್ಞಾನವು ದೊರಕಿದ್ದು
1ಸೊಲೊಮೋನನು ಐಗುಪ್ತದ ಅರಸನಾದ ಫರೋಹನ ಅಳಿಯನಾದನು. ಅವನು ಫರೋಹನ ಮಗಳನ್ನು ಮದುವೆಮಾಡಿಕೊಂಡು ತನ್ನ ಅರಮನೆಯನ್ನೂ, ಯೆಹೋವನ ಆಲಯವನ್ನೂ ಮತ್ತು ಯೆರೂಸಲೇಮಿನ ಸುತ್ತಣ ಗೋಡೆಯನ್ನೂ ಕಟ್ಟಿ ಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲಿ ಇರಿಸಿದನು.2ಆ ವರೆಗೂ ಯೆಹೋವನ ನಾಮಕ್ಕೋಸ್ಕರ ಆಲಯವಿರಲಿಲ್ಲವಾದುದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞವನ್ನು ಆರ್ಪಿಸುತ್ತಿದ್ದರು.3ಸೊಲೊಮೋನನು ಯೆಹೋವನನ್ನು ಪ್ರೀತಿಸಿ, ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವನ್ನರ್ಪಿಸುತ್ತಿದ್ದನು. ಅಲ್ಲಿಯೇ ಧೂಪಹಾಕುತ್ತಿದ್ದನು.4ಒಮ್ಮೆ ಅರಸನಾದ ಸೊಲೊಮೋನನು ಯಜ್ಞಮಾಡುವುದಕ್ಕಾಗಿ ಪೂಜಾಸ್ಥಳಗಳಲ್ಲಿ ಪ್ರಧಾನವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ಯಜ್ಞವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದನು.5ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, <<ನಿನಗೆ ಯಾವ ವರ ಬೇಕು ಕೇಳಿಕೋ>> ಎಂದು ಹೇಳಲು ಸೊಲೊಮೋನನು,6<<ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.7ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು.8ನಿನ್ನ ಸೇವಕನಾದ ನಾನು ಲೆಕ್ಕಿಸಲಾಗದಂಥ ಮಹಾ ಜನಾಂಗವಾಗಿರುವ ನಿನ್ನ ಸ್ವಕೀಯ ಪ್ರಜೆಯ ಮಧ್ಯದಲ್ಲಿದ್ದೇನೆ.9ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?>> ಎಂದು ಬೇಡಿಕೊಂಡನು.10ಸೊಲೊಮೋನನ ಈ ಬಿನ್ನಹವನ್ನು ಕರ್ತನಾದ ದೇವರು ಮೆಚ್ಚಿದನು.11ಆಗ ದೇವರು ಅವನಿಗೆ, <<ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ.12ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.13ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ.14ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವುದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು>> ಎಂದನು.15ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನು ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ತನ್ನ ಎಲ್ಲಾ ಸೇವಕರಿಗಾಗಿ ಔತಣಮಾಡಿಸಿದನು.ಸೊಲೊಮೋನನ ವಿವೇಕಪೂರ್ಣ ತೀರ್ಪು
16ಅದೇ ಕಾಲದಲ್ಲಿ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು.17ಅವರಲ್ಲಿ ಒಬ್ಬಳು ಅರಸನಿಗೆ, <<ನನ್ನ ಒಡೆಯಾ ಕೇಳು, ನಾನು ಮತ್ತು ಈ ಹೆಂಗಸು ಒಂದೇ ಮನೆಯಲ್ಲಿ ವಾಸಮಾಡುತ್ತಿದ್ದೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಮಗುವನ್ನು ಹೆತ್ತೆನು.18ಮೂರನೆಯ ದಿನದಲ್ಲಿ ಇವಳೂ ಹೆತ್ತಳು. ನಾವಿಬ್ಬರೂ ಒಟ್ಟಿಗೆ ಇದ್ದೆವು. ನಮ್ಮಿಬ್ಬರ ಹೊರತು ಆ ಮನೆಯಲ್ಲಿ ಯಾರೂ ಇರಲಿಲ್ಲ19ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು.20ಮಧ್ಯರಾತ್ರಿಯಲ್ಲಿಯೇ ಇವಳೆದ್ದು ನಿಮ್ಮ ಸೇವಕಳಾದ ನಾನು ಗಾಢನಿದ್ರೆಯಲ್ಲಿದ್ದಾಗ ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಪಕ್ಕದಲ್ಲಿಟ್ಟುಕೊಂಡಳು. ಸತ್ತು ಹೋದ ತನ್ನ ಮಗುವನ್ನು ನನ್ನ ಪಕ್ಕದಲ್ಲಿರಿಸಿದಳು.21ನಾನು ಹೊತ್ತಾರೆ ಎದ್ದು ಮಗುವಿಗೆ ಮೊಲೆಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ>> ಎಂದು ಹೇಳಿದಳು.22ಆಗ ಎರಡನೆಯವಳು, <<ಹಾಗಲ್ಲ, ಬದುಕಿರುವವನು ನನ್ನ ಮಗನು ಸತ್ತಿರುವವನು ನಿನ್ನ ಮಗನು>> ಎಂದು ನುಡಿದಳು. ಮೊದಲನೆಯವಳು ತಿರುಗಿ, <<ಅಲ್ಲ, ಸತ್ತಿರುವವನು ನಿನ್ನ ಮಗನು, ಬದುಕಿರುವವನು ನನ್ನ ಮಗನು>> ಎಂದಳು. ಹೀಗೆ ಅವರು ಅರಸನ ಮುಂದೆ ವಾದಿಸುತ್ತಾ ಇದ್ದರು.23ಆಗ ಅರಸನು, <<ಜೀವದಿಂದಿರುವ ಕೂಸು ನನ್ನದು. ಸತ್ತಿರುವುದು ನಿನ್ನದು ಎಂದು ಒಬ್ಬಳು ಹೇಳುತ್ತಾಳೆ. ಇನ್ನೊಬ್ಬಳು ಅಲ್ಲ ಸತ್ತಿರುವುದು ನಿನ್ನದು, ಜೀವದಿಂದಿರುವುದು ನನ್ನದು ಅನ್ನುತ್ತಾಳೆ.24ನನಗೊಂದು ಕತ್ತಿಯನ್ನು ತಂದು ಕೊಡಿರಿ>> ಎಂದು ಸೇವಕರಿಗೆ ಹೇಳಿದನು.25ಅವರು ಕತ್ತಿಯನ್ನು ತರಲು ಅರಸನು ಅವರಿಗೆ, <<ಜೀವದಿಂದಿರುವ ಕೂಸನ್ನು ಕಡಿದು ಎರಡು ಭಾಗ ಮಾಡಿ ಅರ್ಧವನ್ನು ಇವಳಿಗೂ ಅರ್ಧವನ್ನು ಅವಳಿಗೂ ಕೊಡಿರಿ>> ಎಂದು ಅಪ್ಪಣೆ ಮಾಡಿದನು.26ಆಗ ಜೀವದಿಂದಿದ್ದ ಕೂಸಿನ ನಿಜವಾದ ತಾಯಿ ಕೂಸಿನ ವಿಷಯದಲ್ಲಿ ಕರಳು ಮರುಗಿ ಅರಸನಿಗೆ, <<ನನ್ನ ಒಡೆಯಾ ಬೇಡ, ಬದುಕಿರುವ ಕೂಸನ್ನು ಅವಳಿಗೆ ಕೊಟ್ಟುಬಿಡು. ಅದನ್ನು ಕೊಲ್ಲಿಸಬೇಡ>> ಎಂದು ಬೇಡಿಕೊಳ್ಳುವಲ್ಲಿ ಎರಡನೆಯವಳು, <<ಅದು ನನಗೂ ಬೇಡ, ನಿನಗೂ ಬೇಡ ಕತ್ತರಿಸಲಿ>> ಎಂದು ಕೂಗಿದಳು.27ಕೂಡಲೇ ಅರಸನು, <<ಬದುಕಿರುವ ಕೂಸನ್ನು ಕೊಲ್ಲಬೇಡಿರಿ. ಆ ಸ್ತ್ರೀಗೆ ಕೊಡಿರಿ. ಅವಳೇ ಅದರ ತಾಯಿ>> ಎಂದು ಆಜ್ಞಾಪಿಸಿದನು.28ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.
4ಸೊಲೊಮೋನನ ಅಧಿಕಾರಿಗಳು
1ಸೊಲೊಮೋನ ರಾಜನು ಎಲ್ಲಾ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು.2ಅವನ ಮುಖ್ಯ ಉದ್ಯೋಗಸ್ಥರು ಯಾರಾರೆಂದರೆ: ಚಾದೋಕನ ಮಗನಾದ ಅಜರ್ಯನು ಯಾಜಕನು.3ಶೀಷನ ಮಕ್ಕಳಾದ ಎಲೀಹೋರೇಫ್ ಮತ್ತು ಅಹೀಯಾಹು ಎಂಬುವರು ಲೇಖಕರು. ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಮಂತ್ರಿಯು.4ಯೆಹೋಯಾದಾವನ ಮಗನಾದ ಬೆನಾಯನು ಸೈನ್ಯಾಧಿಪತಿ. ಚಾದೋಕನೂ ಮತ್ತು ಎಬ್ಯಾತಾರನೂ ಯಾಜಕರು.5ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು.6ಅಹೀಷಾರನು ರಾಜಗೃಹಾಧಿಪತಿಯು. ಅಬ್ದನ ಮಗನಾದ ಅದೋನೀರಾಮನು ಬಿಟ್ಟೀಕೆಲಸ ಮಾಡಿಸುವವರ ಮುಖ್ಯಸ್ಥನು.7ಸೊಲೊಮೋನನು ಎಲ್ಲಾ ಇಸ್ರಾಯೇಲರ ಮೇಲ್ವಿಚಾರಣೆಗಾಗಿ ಹನ್ನೆರಡು ಕಾರ್ಯನಿರ್ವಾಹಕರನ್ನು ನೇಮಿಸಿದನು. ಅವರಲ್ಲಿ ಪ್ರತಿಯೊಬ್ಬನು ಒಂದೊಂದು ತಿಂಗಳು ಅರಸನಿಗೂ ಮತ್ತು ಅವನ ಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪ್ರತಿವರ್ಷವೂ ಒದಗಿಸಿಕೊಡಬೇಕಾಗಿತ್ತು.8ಅವರು ಯಾರಾರೆಂದರೆ ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿದ್ದ ಹೂರನ ಮಗ,9ಮಾಕಾಚ್, ಶಾಲ್ಬೀಮ್, ಬೇತ್‌ಷೆಮೆಷ್, ಏಲೋನ್ ಮತ್ತು ಬೇತ್ ಹಾನಾನ್ ಎಂಬ ಊರುಗಳ ಒಡೆಯನಾದ ದೆಕೆರನ ಮಗನು.10ಅರುಬ್ಬೋತಿನಲ್ಲಿ ವಾಸವಾಗಿದ್ದ ಹೆಸೆದನ ಮಗ, ಅವನು ಸೋಕೋ ಮತ್ತು ಹೇಫೆರ್ ಎಂಬ ಪ್ರದೇಶಗಳಿಗೆ ಅಧಿಪತಿಯಾಗಿದ್ದನು.11ದೋರ್ ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗ, ಸೊಲೊಮೋನನ ಮಗಳಾದ ಟಾಫತಳು ಅವನ ಹೆಂಡತಿಯಾಗಿದ್ದಳು.12ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು.13ರಾಮೋತ್ ಗಿಲ್ಯಾದಿನಲ್ಲಿದ್ದ ಗೆಬೇರನ ಮಗ, ಅವನು ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದನು.14ಮಹನಯಿಮಿನಲ್ಲಿದ್ದ ಇದ್ದೋವಿನ ಮಗನಾದ ಅಹೀನಾದಾಬನು.15ನಫ್ತಾಲಿ ಪ್ರದೇಶದಲ್ಲಿದ್ದ ಅಹೀಮಾಚನು, ಅವನು ಸೊಲೊಮೋನನ ಮಗಳಾದ ಬಾಸೆಮತಳನ್ನು ಮದುವೆಮಾಡಿಕೊಂಡಿದ್ದನು.16ಅಶೇರಿಗೂ ಮತ್ತು ಆಲೋತಿಗೂ ಒಡೆಯನಾದ ಹೂಷೈಯ ಮಗನಾದ ಬಾಣನು,17ಇಸ್ಸಾಕಾರ್ ಪ್ರಾಂತ್ಯದಲ್ಲಿದ್ದ ಫಾರೂಹನ ಮಗನಾದ ಯೆಹೋಷಾಫಾಟನು,18ಬೆನ್ಯಾಮೀನಿನಲ್ಲಿದ್ದ ಏಲನ ಮಗನಾದ ಶಿಮ್ಮೀ,19ಅಮೋರಿಯರ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ರಾಜ್ಯವಾಗಿದ್ದ ಗಿಲ್ಯಾದ್ ಪ್ರದೇಶಕ್ಕೆಲ್ಲಾ ಒಬ್ಬನೇ ಅಧಿಪತಿಯಾಗಿದ್ದನು ಅವನು ಊರಿಯನ ಮಗನಾದ ಗೆಬೆರ್ ಎಂಬುವವನು.ಸೊಲೊಮೋನನ ವೈಭವವೂ ಜ್ಞಾನವೂ
20ಇಸ್ರಾಯೇಲರು ಮತ್ತು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯರಾಗಿ ಅಭಿವೃದ್ಧಿಯಾದರು. ಅವರು ಅನ್ನಪಾನಗಳನ್ನು ಮಾಡುತ್ತಾ ತೃಪ್ತರಾಗಿ ಸಂತೋಷದಿಂದಿದ್ದರು.21ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.22ಸೊಲೊಮೋನನ ಅರಮನೆಗೆ ಪ್ರತಿದಿನ ಬೇಕಾಗುವ ಆಹಾರಪದಾರ್ಥಗಳು, ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆಗೋದಿಯ ಹಿಟ್ಟು,23ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಹುಲ್ಲುಗಾವಲಿನಲ್ಲಿರುವ ಎತ್ತುಗಳು, ನೂರು ಕುರಿಗಳು ಇವುಗಳಲ್ಲದೆ ಕಡವೆ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು ಇವುಗಳೇ.24ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.25ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.26ಸೊಲೊಮೋನನ ಲಾಯಗಳಲ್ಲಿ ನಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು. ಅವನಿಗೆ ಹನ್ನೆರಡು ಸಾವಿರ ಕುದುರೆಸವಾರರಿದ್ದರು.27ಮೇಲೆ ಕಾಣಿಸಿರುವ ಕಾರ್ಯನಿರ್ವಾಹಕರು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ, ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುವವರೆಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು.28ಇದಲ್ಲದೆ ಅವರು ರಥಾಶ್ವಗಳಿಗಾಗಿಯೂ ಮತ್ತು ಸವಾರಿಕುದುರೆಗಳಿಗಾಗಿಯೂ ನೇಮಕವಾದಷ್ಟು ಜವೆಗೋದಿಯನ್ನು, ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೇ ತಂದೊಪ್ಪಿಸುತ್ತಿದ್ದರು.29ದೇವರು ಸೊಲೊಮೋನನಿಗೆ ವಿಶೇಷವಾದ ಜ್ಞಾನ, ವಿವೇಕಗಳನ್ನೂ, ಸಮುದ್ರ ತೀರದ ಮರಳಿನಷ್ಟು ಅಪರಿಮಿತವಾದ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.30ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ಮಿಗಿಲಾದುದಾಗಿತ್ತು.31ಅವನು ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಸುಪ್ರಸಿದ್ಧವಾಯಿತು.32ಅವನ ಜ್ಞಾನೋಕ್ತಿಗಳು ಮೂರು ಸಾವಿರ ಮತ್ತು ಗೀತೆಗಳು ಸಾವಿರದ ಐದು.33ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು.34ಎಲ್ಲಾ ಜನಾಂಗಗಳಲ್ಲಿಯೂ ಸೊಲೊಮೋನನ ಜ್ಞಾನದ ವಿಶೇಷತೆಯನ್ನು ಕುರಿತು ಕೇಳಿದ ಅನೇಕ ರಾಜರೂ ಮತ್ತು ವಿದ್ವಾಂಸರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಬರುತ್ತಿದ್ದರು.
5ದೇವಾಲಯವನ್ನು ಕಟ್ಟುವುದಕ್ಕೆ ಸಿದ್ಧತೆ
1ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.2ಅನಂತರ ಸೊಲೊಮೋನನು ದೂತರ ಮುಖಾಂತರವಾಗಿ ಹೀರಾಮನಿಗೆ,3<<ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೇ.4ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.5ಯೆಹೋವನು ನನ್ನ ತಂದೆಯಾದ ದಾವೀದನಿಗೆ, <ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ> ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ,6ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು, ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲಾ>> ಎಂದು ಹೇಳಿದನು.7ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, <<ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ>> ಎಂದು ನುಡಿದನು.8ಇದಲ್ಲದೆ ಅವನು ಸೊಲೊಮೋನನಿಗೆ, <<ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.9ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ>> ಎಂದು ಹೇಳಿ ಕಳುಹಿಸಿದನು.10ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು.11ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.12ಯೆಹೋವನು ತಾನು ವಾಗ್ದಾನ ಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಒಳ್ಳೆಯ ಸಂಬಂಧವಿತ್ತು, ಅವರಿಬ್ಬರು ಪರಸ್ಪರವಾಗಿ ಒಡಂಬಡಿಕೆ ಮಾಡಿಕೊಂಡಿದ್ದರು.13ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಜನರನ್ನು ಬಲವಂತವಾಗಿ ಕರೆತಂದನು.14ಅವರಲ್ಲಿ ತಿಂಗಳಿಗೆ ಹತ್ತು ಸಾವಿರ ಜನರಂತೆ ಪ್ರತಿತಿಂಗಳು ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.15ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಜನರು ಹೊರೆ ಹೊರುವವರೂ, ಎಂಭತ್ತು ಸಾವಿರ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.16ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳನ್ನು ನೇಮಿಸಿದನು.17ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು.18ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಹಾಗು ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕಾಗಿ ಬೇಕಾಗುವ ಕಲ್ಲು ಮತ್ತು ಮರಗಳನ್ನು ಸಿದ್ಧಪಡಿಸಿದರೂ ಇವರೇ.
6ಸೊಲೊಮೋನನು ದೇವಾಲಯವನ್ನು ಕಟ್ಟಿದ್ದು
1ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.2ಅವನು ಯೆಹೋವನಿಗೋಸ್ಕರ ಕಟ್ಟಿಸಿದ ಆಲಯದ ಉದ್ದ ಅರುವತ್ತು ಮೊಳ [27 ಮೀಟರ್.], ಅಗಲ ಇಪ್ಪತ್ತು ಮೊಳ [9 ಮೀಟರ್.], ಎತ್ತರ ಮೂವತ್ತು ಮೊಳ [13.5 ಮೀಟರ್.].3ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು. ಅದರ ಉದ್ದ ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ [9 ಮೀಟರ್.], ಅಗಲ ಹತ್ತು ಮೊಳ [4.5 ಮೀಟರ್].4ಇದಲ್ಲದೆ ಅವನು ಆಲಯಕ್ಕೆ ತೆರೆಯಲಾರದ ಜಾಲರಿಗಳುಳ್ಳ ಕಿಟಿಕಿಗಳನ್ನಿರಿಸಿದನು.5ದೇವಾಲಯದ ಗೋಡೆಯ ಸುತ್ತಲೂ ಅಂದರೆ ಪರಿಶುದ್ಧ ಸ್ಥಳ ಮತ್ತು ಮಹಾಪರಿಶುದ್ಧ ಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.6ಕೆಳಗಿನ ಕೊಠಡಿಗಳ ಅಗಲವು ಐದು ಮೊಳ. ಮೊದಲನೆಯ ಅಂತಸ್ತುಗಳ ಕೊಠಡಿಗಳ ಅಗಲವು ಆರು ಮೊಳ. ಎರಡನೆಯ ಅಂತಸ್ತುಗಳ ಕೊಠಡಿಗಳ ಅಗಲವು ಏಳು ಮೊಳ. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಗಳಲ್ಲಿ ತೂತಾಗಬಾರದು ಎಂದು ಗೋಡೆಯ ಹೊರಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು.7ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿನಗಳಲ್ಲಿ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸುತ್ತಿರಲಿಲ್ಲ.8ಕೆಳಗಿನ ಕೊಠಡಿಗೆ ಹೋಗುವ ಬಾಗಿಲು ಆಲಯದ ಬಲಗಡೆಯಲ್ಲಿತ್ತು. ಅಲ್ಲಿಂದ ಮಧ್ಯದ ಅಂತಸ್ತಿಗೂ ಮತ್ತು ಮೂರನೆಯ ಅಂತಸ್ತಿಗೂ ಹೋಗಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.9ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಮತ್ತು ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ಮುಗಿಸಿದನು.10ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸೇರಿಸಲ್ಪಟ್ಟಿದ್ದವು.11ಯೆಹೋವನು ಸೊಲೊಮೋನನಿಗೆ ಈ ಮಾತುಗಳನ್ನು ತಿಳಿಸಿದನು.12<<ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುವಿಯಷ್ಟೆ. ನೀನು ನನ್ನ ನಿಯಮ ವಿಧಿಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವುದಾದರೆ, ನಾನು ನಿನ್ನನ್ನು ಕುರಿತು ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.13ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು>> ಎಂದು ಹೇಳಿದನು.14ಸೊಲೊಮೋನನು ದೇವಾಲಯವನ್ನು ಕಟ್ಟಿಸಿ ಮುಗಿಸಿದನು.ದೇವಾಲಯದ ಒಳಗಿನ ಅಲಂಕಾರ
15ಅನಂತರ ಅವನು ಅದರ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಕಿದನು.16ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿದನು. ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳ ಎಂದು ಪ್ರತ್ಯೇಕಿಸಿದನು.17ದೇವಾಲಯದ ಪರಿಶುದ್ಧ ಸ್ಥಳ ಎನ್ನಿಸಿಕೊಳ್ಳುವ ಮುಂದಿನ ಭಾಗವು ನಲ್ವತ್ತು ಮೊಳ ಉದ್ದವಿತ್ತು.18ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಗಳನ್ನೆಲ್ಲಾ ಬಳ್ಳಿಗಳು ಮತ್ತು ಹೂವುಗಳು ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು.19ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಇಡುವುದಕ್ಕಾಗಿ ದೇವಾಲಯದೊಳಗೆ ಒಂದು ಭಾಗವನ್ನು ಗರ್ಭಗೃಹವೆಂದು ಪ್ರತ್ಯೇಕಿಸಿದನು.20ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವೂ, ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ, ಧೂಪವೇದಿಯನ್ನು ದೇವದಾರು ಮರದಿಂದಲೂ ಹೊದಿಸಿದನು.21ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. ಮಹಾಪರಿಶುದ್ಧ ಸ್ಥಳದ ಎದುರಿನಲ್ಲಿ ಒಂದು ಗೋಡೆಯನ್ನು ಮತ್ತು ಇನ್ನೊಂದು ಗೋಡೆಗೆ ಬಂಗಾರದ ಸರಪಣಿಗಳನ್ನು ಕಟ್ಟಿಸಿದನು.22ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ವೇದಿಯನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.23ಇದಲ್ಲದೆ ಅವನು ಎಣ್ಣೇ ಮರದಿಂದ ಹತ್ತು ಮೊಳ ಎತ್ತರವಾದ ಎರಡು ಕೆರೂಬಿಗಳನ್ನು ಮಾಡಿಸಿ, ಅವುಗಳನ್ನು ಗರ್ಭಗೃಹದಲ್ಲಿ ಇರಿಸಿದನು.24ಪ್ರತಿಯೊಂದು ಕೆರೂಬಿಯ ರೆಕ್ಕೆಗಳು ಐದೈದು ಮೊಳ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ಒಂದು ತುದಿಯಿಂದ ಇನ್ನೊಂದು ತುದಿಗೆ ಹತ್ತು ಮೊಳಗಳಾಗಿದ್ದವು.25ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವು ಹತ್ತು ಮೊಳವಾಗಿತ್ತು. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇಯಾಗಿದ್ದವು.26ಅವೆರಡು ಹತ್ತತ್ತು ಮೊಳ ಎತ್ತರವಾಗಿದ್ದವು.27ಅವನು ಅವುಗಳನ್ನು ದೇವಾಲಯದ ಗರ್ಭಗೃಹದಲ್ಲಿಡಿಸಿದನು. ಅವುಗಳ ರೆಕ್ಕೆಗಳು ಚಾಚಿದಂತಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಈಚೆಯ ಗೋಡೆಗೂ, ಎರಡನೆಯ ಕೆರೂಬಿಯ ಒಂದು ರೆಕ್ಕೆಯು ಆಚೆಯ ಗೋಡೆಗೂ ತಗುಲಿದ್ದವು. ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿದಂತೆ ಇತ್ತು.28ಈ ಕೆರೂಬಿಗಳು ಬಂಗಾರದ ತಗಡುಗಳಿಂದ ಹೊದಿಸಲ್ಪಟ್ಟಿದ್ದವು.29ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಮತ್ತು ಒಳಗೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.30ದೇವಾಲಯದ ಒಳಗಣ ಮತ್ತು ಹೊರಗಣ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು.31ಗರ್ಭಗೃಹದ ಬಾಗಿಲಿಗೆ ಎಣ್ಣೇ ಮರದ ಬಾಗಿಲುಗಳನ್ನು ಇಡಿಸಿದನು. ಚೌಕಟ್ಟು ಪಂಚಕೋನಗಳಿಂದ ಕೂಡಿತ್ತು.32ಎಣ್ಣೇ ಮರದ ಆ ಎರಡು ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಇಡಿಸಿದನು.33ಇದಲ್ಲದೆ ಅವನು ಪರಿಶುದ್ಧ ಸ್ಥಳದ ಬಾಗಿಲಿಗೆ ಎಣ್ಣೇ ಮರದಿಂದ ಚತುಷ್ಕೋಣದ ಚೌಕಟ್ಟನ್ನು ಮಾಡಿಸಿ34ಅದಕ್ಕೆ ತುರಾಯಿಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಿಚಬಹುದಾಗಿತ್ತು.35ಈ ಬಾಗಿಲುಗಳಲ್ಲಿ ಕೆರೂಬಿ, ಖರ್ಜೂರವೃಕ್ಷ ಮತ್ತು ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ, ಕೆತ್ತನೆಯಿದ್ದಲ್ಲಿ ಆ ತಗಡನ್ನು ಇಡಿಸಿದನು.36ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ, ಒಂದು ಸಾಲು ದೇವದಾರಿನ ಕಂಬಗಳನ್ನೂ ಇರಿಸಿದನು.37ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ವೈಶಾಖ ಮಾಸದಲ್ಲಿ ಯೆಹೋವನ ಆಲಯದ ಅಸ್ತಿವಾರವನ್ನು ಹಾಕಿದರು.38ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.
7ಸೊಲೊಮೋನನು ತನ್ನ ಅರಮನೆಯನ್ನು ಕಟ್ಟಿದ್ದು
1ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು.2ಅವನು ಕಟ್ಟಿಸಿದ ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರವು ನೂರು ಮೊಳ ಉದ್ದ, ಐವತ್ತು ಮೊಳ ಅಗಲ ಮತ್ತು ಮೂವತ್ತು ಮೊಳ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳೂ, ಅವುಗಳ ಮೇಲೆ ಇಡಲ್ಪಟ್ಟ ದೇವದಾರಿನ ತೊಲೆಗಳೂ ಅದಕ್ಕೆ ಆಧಾರವಾಗಿದ್ದವು.3ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಲ್ವತ್ತೈದು ಇದ್ದವು.4ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕಿನ ಕಿಟಕಿಗಳಿದ್ದವು5ಎಲ್ಲಾ ದ್ವಾರಗಳೂ, ಬೆಳಕಿನ ಕಿಟಕಿಗಳೂ ಚತುಷ್ಕೋಣದ ಆಕಾರವುಳ್ಳವುಗಳಾಗಿದ್ದವು. ಮೂರು ಮೂರು ಸಾಲು ಬೆಳಕಿನ ಕಿಟಕಿಗಳು ಎದುರುಬದುರಾಗಿದ್ದವು.6ಇದಲ್ಲದೆ ಸೊಲೊಮೋನನು ಒಂದು ಕಂಬ ಮಂಟಪವನ್ನು ಕಟ್ಟಿಸಿದನು. ಅದರ ಉದ್ದ ಐವತ್ತು ಮೊಳ, ಅಗಲ ಮೂವತ್ತು ಮೊಳ. ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು. ಆ ಪಡಸಾಲೆಗೆ ಕಂಬಗಳೂ ಮೆಟ್ಟಲುಗಳೂ ಇದ್ದವು.7ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರ್ಮಾನ ಮಾಡುತ್ತಿದ್ದರಿಂದ ಅದಕ್ಕೆ ನ್ಯಾಯಮಂದಿರವೆಂತಲೂ ಹೆಸರಾಯಿತು. ಇದರ ಎಲ್ಲಾ ಗೋಡೆಗಳೂ ನೆಲದಿಂದ ಮಾಳಿಗೆಯ ವರೆಗೆ ದೇವದಾರು ಮರದ ಹಲಿಗೆಗಳಿಂದ ಹೊದಿಸಲ್ಪಟ್ಟಿದ್ದವು.8ನ್ಯಾಯಮಂದಿರದ ಹಿಂದಿನ ಪ್ರಾಕಾರದಲ್ಲಿ ತನ್ನ ವಾಸಕ್ಕಾಗಿ ಅರಮನೆಯನ್ನೂ, ತನ್ನ ಹೆಂಡತಿಯಾದ ಫರೋಹನ ಮಗಳಿಗೋಸ್ಕರ ಇನ್ನೊಂದು ಮನೆಯನ್ನು ಕಟ್ಟಿಸಿದನು. ಅದನ್ನು ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು.9ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತು ಗೋಡೆಯನ್ನೂ, ದೊಡ್ಡ ಪ್ರಾಕಾರದ ಸುತ್ತು ಗೋಡೆಯನ್ನೂ, ಅಸ್ತಿವಾರದ ಮೇಲಣಿಂದ ಕಡೇ ವರಸೆಯವರೆಗೆ ಅಳತೆಯ ಮೇರೆಗೆ ಕೆತ್ತಲ್ಪಟ್ಟ ಎರಡು ಮಗ್ಗುಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು.10ಅಸ್ತಿವಾರಕ್ಕೆ ಹಾಕಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಮೊಳ ಹಾಗೂ ಹತ್ತು ಮೊಳ ಉದ್ದವಾಗಿದ್ದವು.11ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ, ದೇವದಾರಿನ ಮರವನ್ನೂ ಉಪಯೋಗಿಸಿದನು.12ಒಳಗಿನ ಪ್ರಾಕಾರವೆನ್ನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ, ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು.ತಾಮ್ರದ ಕಂಬಗಳೂ ದೇವಾಲಯದ ಉಪಕರಣಗಳು
13ಅರಸನಾದ ಸೊಲೊಮೋನನು ತೂರ್ ಪಟ್ಟಣದಿಂದ ಹೀರಾಮ್ ಎಂಬುವನನ್ನು ಕರೆಯಿಸಿದನು.14ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.15ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅವುಗಳ ಸುತ್ತಳತೆಯು ಹನ್ನೆರಡು ಮೊಳ.16ಇದಲ್ಲದೆ ಅವನು ತಾಮ್ರವನ್ನು ಎರಕ ಹೊಯ್ದು ಕಂಬಗಳ ಮೇಲೆ ಇಡುವುದಕ್ಕೊಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ,17ಒಂದೊಂದಕ್ಕೆ ಏಳೇಳರಂತೆ ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ತಾಮ್ರದ ಸರಿಗೆಯ ಜಾಲರಿಗಳನ್ನೂ ಮಾಡಿದನು.18ಇದಲ್ಲದೆ ಅವನು ತಾಮ್ರದ ದಾಳಿಂಬೆಹಣ್ಣುಗಳನ್ನು ಮಾಡಿ, ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.19ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲದ ಆಕಾರ ಉಳ್ಳದ್ದಾಗಿತ್ತು.20ಆ ಕುಂಭಗಳ ಮೇಲಿರುವ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆ ಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು.21ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ, ಎಡಗಡೆಯ ಕಂಬಕ್ಕೆ ಬೋವಜ್ ಎಂದು ಹೆಸರಿಟ್ಟನು.22ಅವನು ಕಂಬಗಳ ಮೇಲೆ ಕಮಲಾಕಾರವನ್ನು ಮಾಡಿ ಅವುಗಳ ಕೆಲಸವನ್ನು ತೀರಿಸಿದನು.23ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ.24ಅದನ್ನು ಎರಕ ಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕ ಹೊಯ್ದಿದ್ದನು.25ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ ಮತ್ತು ಮೂರು ಪೂರ್ವದಿಕ್ಕಿಗೂ ಮುಖಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗವು ಒಳಗಡೆ ಇತ್ತು.26ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲದ ಆಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬಾನೆಗಳಷ್ಟು ನೀರು ಹಿಡಿಯುತ್ತಿತ್ತು.27ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು.28ಅವುಗಳನ್ನು ಮಾಡಿದ ವಿಧಾನ ಹೇಗೆಂದರೆ, ಅವುಗಳಲ್ಲಿ ನಿಲುವು ಪಟ್ಟಿಗಳಿಂದ ಕೂಡಿದ ಅಡ್ಡಪಟ್ಟಿಗಳಿದ್ದವು.29ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ ಮತ್ತು ಕೆರೂಬಿ ಇವುಗಳ ಚಿತ್ರಗಳಿದ್ದವು. ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು. ಸಿಂಹ, ಹೋರಿ ಇವುಗಳ ಮೇಲೂ ಕೆಳಗೂ ತೋರಣ ಚಿತ್ರಗಳಿದ್ದವು.30ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕ ಹೊಯ್ದ ತಾಮ್ರದ ಹಿಡಿಗಳಿದ್ದವು. ಅವು ಪೀಠದ ಮೇಲಣ ಗಂಗಾಳವನ್ನು [ನೀರು ತುಂಬುವ ಬೋಗುಣಿಗಳು] ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣ ಚಿತ್ರಗಳಿದ್ದವು.31ಗಂಗಾಳವನ್ನು ಇಡುವುದಕ್ಕೋಸ್ಕರ ಪೀಠದ ಮೇಲಣ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿತ್ತು. ಚಕ್ರಾಕಾರವಾಗಿರುವ ಈ ಬಾಯಿಯು ಒಂದುವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚೌಕಾಕಾರವಾಗಿದ್ದವು.32ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗಿದ್ದವು. ತಿರುಗೋಲು ಮತ್ತು ಪೀಠವು ಅಖಂಡವಾಗಿದ್ದವು. ಪ್ರತಿಯೊಂದು ಗಾಲಿಯು ಒಂದುವರೆ ಮೊಳ ಎತ್ತರವಿತ್ತು.33ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ ಇವುಗಳಿಗೆ ಸಂಬಂಧಪಟ್ಟ ತಿರುಗೋಲು ತಾಮ್ರದವುಗಳು.34ಪ್ರತಿಯೊಂದು ಪೀಠದ ತುದಿಯಲ್ಲಿದ್ದ ನಾಲ್ಕು ಹಿಡಿಗಳು ಪೀಠದೊಡನೆ ಅಖಂಡವಾಗಿದ್ದವು.35ಪೀಠದ ಮೇಲಣ ಭಾಗದಲ್ಲಿದ್ದ ಚಕ್ರಾಕಾರವಾದ ಬಾಯಿಯು ಅರ್ಧ ಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡ ಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು.36ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣ ಚಿತ್ರಗಳನ್ನೂ ಮಾಡಿಸಿದನು.37ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವು ಅಳತೆಯೂ ಒಂದೇಯಾಗಿತ್ತು.38ಇದಲ್ಲದೆ ಅವನು ನಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ, ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.39ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ, ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.40ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಹೀರಾಮನು ಮಾಡಿಸಿದ ಒಟ್ಟು ಸಾಮಾನುಗಳ ಪಟ್ಟಿ.41ಎರಡು ಕಂಬಗಳು ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು42ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬಹಣ್ಣುಗಳು,43ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ಗಂಗಾಳಗಳು,44ಸಮುದ್ರವೆನಿಸಿಕೊಳ್ಳುವ ಪಾತ್ರೆಯೂ, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,45ಹಂಡೆ, ಸಲಿಕೆ ಬೋಗುಣಿಗಳು ಇವೇ. ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ರುಜುವಾತು ಪಡಿಸಿ ತಾಮ್ರದಿಂದ ಮಾಡಿಸಿದನು.46ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಮತ್ತು ಚಾರೆತಾನಿಗೂ ಮಧ್ಯದಲ್ಲಿರುವ ಜೇಡಿ ಮಣ್ಣು ಇರುವ ನೆಲದಲ್ಲಿ ಎರಕ ಹೊಯ್ಯಿಸಿದನು.47ಸೊಲೊಮೋನನು ತಾನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕವು ಎಷ್ಟೆಂಬುದನ್ನು ಗೊತ್ತುಮಾಡಲಾಗಲ್ಲಿಲ್ಲ.48ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,49ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ, ಬಲಗಡೆಯಲ್ಲಿಯೂ ಇಡುವುದಕ್ಕಾಗಿ ಐದೈದರಂತೆ ಇಡುವುದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆ, ಇಕ್ಕಳಗಳು, ಚೊಕ್ಕ ಬಂಗಾರದ ಬಟ್ಟಲುಗಳು,50ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ51ಪರಿಶುದ್ಧಸ್ಥಳದ ಬಾಗಿಲುಗಳಿಗೂ ಇರುವ ಬಂಗಾರದ ತಿರುಗುಣಿಗಳು ಇವುಗಳೇ. ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಮತ್ತು ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.
8ಮಂಜೂಷವನ್ನು ದೇವಾಲಯಕ್ಕೆ ತಂದದ್ದು ಮತ್ತು ಪ್ರತಿಷ್ಠಾಪಿಸಿದ್ದು
1ಅನಂತರ ಅರಸನಾದ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೂ ಕುಲಾಧಿಪತಿಗಳು ಇವರೇ ಮೊದಲಾದ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇಮಿಗೆ ತನ್ನ ಹತ್ತಿರಕ್ಕೆ ಕರೆಯಿಸಿಕೊಂಡನು.2ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಾದ ಆಶ್ವೀಜ ಮಾಸದಲ್ಲಿ ಜಾತ್ರೆಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.3ಇಸ್ರಾಯೇಲರ ಎಲ್ಲಾ ಹಿರಿಯರು ಒಟ್ಟಾಗಿ ಬಂದಾಗ ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.4ಉಳಿದ ಯಾಜಕರೂ ಮತ್ತು ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತುಕೊಂಡರು.5ಅರಸನಾದ ಸೊಲೊಮೋನನು ಅಲ್ಲಿ ಕೂಡಿ ಬಂದಿದ್ದ ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.6ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು.7ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.8ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲೇ ಇವೆ.9ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.10ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು.11ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.12ತರುವಾಯ ಸೊಲೊಮೋನನು, <<ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ.13ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ>> ಎಂದು ಪ್ರಾರ್ಥನೆಮಾಡಿದನು.ಸೊಲೊಮೋನನ ಭಾಷಣ
14ಇದಾದ ಮೇಲೆ ಅರಸನು ಎದ್ದು ನಿಂತು ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ,15<<ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ.16ಆತನು, <ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ> ಎಂದು ಹೇಳಿದ್ದನು.17ನನ್ನ ತಂದೆಯಾದ ದಾವೀದನು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿಗೋಸ್ಕರ ಮನೆಯನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದನು.18ಆಗ ಯೆಹೋವನು ಅವನಿಗೆ, <ನೀನು ನನ್ನ ಹೆಸರಿಗೋಸ್ಕರ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೆ ಸರಿ. ಆದರೂ ನೀನು ಅದನ್ನು ಕಟ್ಟಬಾರದು.19ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು> ಎಂದು ಹೇಳಿದನು.20ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಈ ಆಲಯವನ್ನು ಕಟ್ಟಿದೆನು.21ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು>> ಎಂದು ಹೇಳಿದನು.ಸೊಲೊಮೋನನ ಪ್ರಾರ್ಥನೆ
22ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು,23<<ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.24ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿರುವೆ. ನಿನ್ನ ಬಾಯಿ ನುಡಿದಿದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿದೆ.25ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, <ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು> ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.26ಇಸ್ರಾಯೇಲ್ ದೇವರೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನುಡಿದಿದ್ದೆಲ್ಲವೂ ಸಾರ್ಥಕವಾಗಲಿ.27<<ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?28ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು. ಈ ಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.29ಈ ಸ್ಥಳವನ್ನು ಕುರಿತು, <ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು> ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು.30ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.31<<ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ಈ ಯಜ್ಞವೇದಿಯ ಮುಂದೆ ನಿಂತು ಪ್ರಮಾಣಮಾಡುವುದಾದರೆ,32ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.33<<ತಮ್ಮ ಪಾಪಗಳ ಫಲವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದಲ್ಲಿ ನಿನಗೆ ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಮಾಡುವುದಾದರೆ,34ಪರಲೋಕದಲ್ಲಿರುವ ನೀನು ಅದನ್ನು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮರಳಿ ಬರುವಂತೆಮಾಡು.35<<ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ,36ಪರಲೋಕದಲ್ಲಿರುವ ನೀನು ಆಲಿಸಿ, ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.37<<ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ,38ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ಸ್ತುತಿಸಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನು ಮಾಡುವುದಾದರೆ,39ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.40ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವರು.41<<ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದ ಒಬ್ಬ ಪರದೇಶದವನು ನಿನ್ನ ನಾಮಸ್ತುತಿಗೋಸ್ಕರ ದೂರದೇಶದಿಂದ ಬರುವಾಗ42ಅಲ್ಲಿ ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವುದು. ಅವನು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವುದಾದರೆ,43ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.44ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೋಸ್ಕರ ಎಲ್ಲಿಗಾದರು ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವುದಾದರೆ45ಪರಲೋಕದಲ್ಲಿರುವ ನೀನು ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಕೇಳಿ, ಅವರ ನ್ಯಾಯವನ್ನು ಸ್ಥಾಪಿಸು.46<<ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,47ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,48<ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು> ಎಂದು ಒಪ್ಪಿ ಪೂರ್ಣಮನಸ್ಸಿನಿಂದ ನಿನ್ನನ್ನು ಪ್ರಾರ್ಥಿಸುವುದಾದರೆ,49ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು ಲಾಲಿಸಿ ಅವರ ನ್ಯಾಯವನ್ನು ಸ್ಥಾಪಿಸು.50ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ.51ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷಮಿಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು.52ನಿನ್ನ ಸೇವಕನ ಮೇಲೆಯೂ, ನಿನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆಯೂ ಕಟಾಕ್ಷವಿಟ್ಟು ಅವರು ಪ್ರಾರ್ಥಿಸುವಾಗೆಲ್ಲಾ ಅವರ ವಿಜ್ಞಾಪನೆಗಳನ್ನು ಲಾಲಿಸು.53ಕರ್ತನೇ, ಯೆಹೋವನೇ, ನೀನು ನಮ್ಮ ಪೂರ್ವಿಕರನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ, ಸ್ವಕೀಯಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ>> ಎಂದು ದೇವರನ್ನು ಪ್ರಾರ್ಥಿಸಿದನು.ಸೊಲೊಮೋನನು ಇಸ್ರಾಯೇಲ್ ಸಮೂಹವನ್ನು ಆಶೀರ್ವದಿಸಿದ್ದು
54ಸೊಲೊಮೋನನು ಆಕಾಶದ ಕಡೆಗೆ ಕೈಯೆತ್ತಿ ಯೆಹೋವನ ಯಜ್ಞವೇದಿಯ ಮುಂದೆ ಮೊಣಕಾಲೂರಿ ಯೆಹೋವನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತು55ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ,56<<ತಾನು ವಾಗ್ದಾನ ಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ.57ನಮ್ಮ ದೇವರಾದ ಯೆಹೋವನು ನಮ್ಮ ಪೂರ್ವಿಕರ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ, ಆತನು ನಮ್ಮನ್ನು ಕೈಬಿಡದಿರಲಿ, ನಿರಾಕರಿಸದಿರಲಿ.58ನಾವು ನಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಿಲಿ.59ನಾನು ಈಗ ನಮ್ಮ ದೇವರಾದ ಯೆಹೋವನಿಗೆ ಮಾಡಿದ ವಿಜ್ಞಾಪನೆಯು ಹಗಲಿರುಳು ಆತನ ಜ್ಞಾಪಕದಲ್ಲಿರಲಿ.60ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ ಆತನು ಅಗತ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.61ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣ ಭಯಭಕ್ತಿಯುಳ್ಳವರಾಗಿ, ಆತನ ವಿಧಿಗಳನ್ನು ಅನುಸರಿಸಿ, ಆತನ ಆಜ್ಞೆಗಳನ್ನು ಕೈಕೊಳ್ಳಿರಿ>> ಎಂಬುದೇ.ದೇವಾಲಯದ ಪ್ರತಿಷ್ಠೆ
62ಆನಂತರ ಅರಸನೂ, ಎಲ್ಲಾ ಇಸ್ರಾಯೇಲರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು.63ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ ಮತ್ತು ಕುರಿಗಳು ಲಕ್ಷದ ಇಪ್ಪತ್ತು ಸಾವಿರ, ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲರೂ ಯೆಹೋವನ ಆಲಯವನ್ನು ಪ್ರತಿಷ್ಠೆ ಮಾಡಿದರು.64ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ, ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ಚಿಕ್ಕದಾಗಿದ್ದುದರಿಂದ ಸೊಲೊಮೋನನು ಆ ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು.65ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.66ಎಂಟನೆಯ ದಿನ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ನೆನದು ಆನಂದಚಿತ್ತರಾಗಿ, ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.
9ಯೆಹೋವನು ಸೊಲೊಮೋನನಿಗೆ ಪುನಃ ಪ್ರತ್ಯಕ್ಷನಾದದ್ದು
1ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿದ ನಂತರ,2ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು.3ಆತನು ಅವನಿಗೆ, <<ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.4ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವುದಾದರೆ,5ಇಸ್ರಾಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು. <ಇಸ್ರಾಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು> ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.6ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿಯುವುದಾದರೆ7ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. <ಇಸ್ರಾಯೇಲರು> ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.8 ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, <ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?> ಎಂದು ಕೇಳುವರು.9ಆಗ ಈ ದೇಶದವರು ಅವರಿಗೆ, <ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ> ಎಂಬ ಉತ್ತರ ಹೇಳುವರು>> ಎಂದನು.ಸೊಲೊಮೋನನು ಮಾಡಿದ ಇತರ ಸಂಗತಿಗಳು
10ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.11ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.12ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನಿಗೆ ಮೆಚ್ಚಿಗೆಯಾಗಲಿಲ್ಲ.13ಆದುದರಿಂದ ಅವನು ಸೊಲೊಮೋನನಿಗೆ, <<ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೇ?>> ಎಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ.14ಹೀರಾಮನು ಸೊಲೊಮೋನನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನು ಕೊಟ್ಟನು.15ಸೊಲೊಮೋನನ ಬಿಟ್ಟೀ ಕೆಲಸದವರು ಕಟ್ಟಿದವುಗಳು ಯಾವುವೆಂದರೆ, ಯೆಹೋವನ ಆಲಯ, ಅರಮನೆ, ಮಿಲ್ಲೋ ಕೋಟೆ, ಯೆರೂಸಲೇಮಿನ ಪೌಳಿಗೋಡೆ, ಹಾಚೋರ್ ಮೆಗಿದ್ದೋ ಮತ್ತು ಗೆಜೆರ್ ಇವುಗಳೇ.16ಐಗುಪ್ತದ ಅರಸನಾದ ಫರೋಹನು ಗೆಜೆರ್ ಪಟ್ಟಣವನ್ನು ಹಿಡಿದು ಅದಕ್ಕೆ ಬೆಂಕಿಹೊತ್ತಿಸಿ, ಅದರಲ್ಲಿದ್ದ ಕಾನಾನ್ಯರನ್ನು ಹತಿಸಿ, ಅದನ್ನು ವಶಮಾಡಿಕೊಂಡು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಮದುವೆಯ ಉಡುಗೊರೆಯಾಗಿ ಕೊಟ್ಟಿದ್ದನು.17ಸೊಲೊಮೋನನು ಗೆಜೆರ್ ಪಟ್ಟಣದ ಹೊರತಾಗಿ ಕೆಳಗಿನ ಬೆತ್ ಹೋರೋನ್,18ಯೆಹೂದದ ಅರಣ್ಯಪ್ರದೇಶದಲ್ಲಿರುವ ಬಾಲಾತ್ ಮತ್ತು ತಾಮಾರ್,19ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು, ಯುದ್ಧ ರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.20ಇದಲ್ಲದೆ ಅವನು ಇಸ್ರಾಯೇಲರಿಂದ ಸಂಹೃತರಾದ ಅನ್ಯ ಜನರನ್ನೂ, ಕಾನಾನ್ ದೇಶದಲ್ಲಿ ಉಳಿದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ,21ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟೀಹಿಡಿದನು. ಇಂದಿನ ವರೆಗೂ ಅವರು ಬಿಟ್ಟೀಕೆಲಸದವರಾಗಿರುತ್ತಾರೆ.22ಆದರೆ ಅವನು ಇಸ್ರಾಯೇಲರನ್ನು ಬಿಟ್ಟೀಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.23ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲರನ್ನು ಅಧಿಕಾರಿಗಳನ್ನಾಗಿಯೂ ನೇಮಿಸಿದನು.24ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ ಅರಮನೆಗೆ ಬಂದಳು. ಅನಂತರ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು.25ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು.26ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.27ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.28ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು.
10ಶೆಬಾ ದೇಶದ ರಾಣಿಯು ಸೊಲೊಮೋನನ ದರ್ಶನಕ್ಕೆ ಬಂದದ್ದು
1ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.2ಆಕೆಯು ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು, ಮಹಾಪರಿವಾರದೊಡನೆ ಯೆರೂಸಲೇಮಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.3ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೂ ಉತ್ತರಕೊಟ್ಟನು. ಅವುಗಳಲ್ಲಿ ಸೊಲೊಮೋನನಿಗೆ ತಿಳಿಯದಂಥದ್ದು ಅವುಗಳಲ್ಲಿ ಒಂದೂ ಇರಲಿಲ್ಲವಾದುದರಿಂದ ಅವನು ಅವೆಲ್ಲವುಗಳಿಗೆ ಉತ್ತರಕೊಟ್ಟನು.4ಶೆಬೆದ ರಾಣಿಯು ಸೊಲೊಮೋನನ ಎಲ್ಲಾ ಜ್ಞಾನ, ಅವನು ಕಟ್ಟಿಸಿದ ಅರಮನೆ,5ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.6ಅವಳು ಅರಸನಿಗೆ, <<ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನು, ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.7ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ. ಈಗ ಇಲ್ಲಿ ಬಂದು ನೋಡಿದರೆ ನಿನ್ನ ಜ್ಞಾನವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ. ಜನರು ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.8ನಿನ್ನ ಪ್ರಜೆಗಳು ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರು ಧನ್ಯರು.9ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ>> ಎಂದು ಹೇಳಿದಳು.10ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧದ್ರವ್ಯವನ್ನೂ ಮತ್ತು ರತ್ನಗಳನ್ನೂ ಕೊಟ್ಟಳು. ಶೆಬೆದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಅವನಿಗೆ ಪುನಃ ಯಾರು ಕೊಡಲಿಲ್ಲ. ಬರಲೇ ಇಲ್ಲ.11ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ಮತ್ತು ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು.12ಅರಸನು ಸುಗಂಧದ ಮರದಿಂದ ಯೆಹೋವನ ಆಲಯ ಮತ್ತು ಅರಮನೆ ಇವುಗಳಿಗೆ ಸ್ತಂಭಗಳನ್ನು, ಗಾಯಕರಿಗೋಸ್ಕರ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಆಗ ಬಂದಷ್ಟು ಸುಗಂಧದ ಮರವು ಇಂದಿನ ವರೆಗೂ ಆ ದೇಶಕ್ಕೆ ಬರಲಿಲ್ಲ ಮತ್ತು ಕಾಣಲಿಲ್ಲ.13ಅರಸನಾದ ಸೊಲೊಮೋನನು ಶೆಬೆದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ ಆಕೆಯು ಕೇಳಿದವುಗಳೆಲ್ಲವನ್ನು ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದೊಡನೆ ಸ್ವದೇಶಕ್ಕೆ ಹೊರಟುಹೋದಳು.ಸೊಲೊಮೋನನ ವೈಭವ
14ಸೊಲೊಮೋನನಿಗೆ ಒಂದು ವರ್ಷದಲ್ಲಿ ಆರುನೂರ ಅರುವತ್ತಾರು ತಲಾಂತು ಬಂಗಾರ ದೊರಕುತ್ತಿತ್ತು.15ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.16ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರ ಹಿಡಿಯಿತು.17ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ನೂರೈವತ್ತು ತೊಲಾ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.18ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದಕ್ಕೆ ಚೊಕ್ಕ ಬಂಗಾರದ ತಗಡನ್ನು ಹೊದಿಸಿದನು19ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿಯು ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳು, ಅವುಗಳ ಹತ್ತಿರ ಎರಡು ಸಿಂಹಗಳು ಇದ್ದವು.20ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.21ಅರಸನಾದ ಸೊಲೊಮೋನನ ಪಾನಪಾತ್ರೆಗಳು, ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿದ್ದ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆ ಇರಲಿಲ್ಲವಾದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.22ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು.23ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.24ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.25ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಕ್ಕೆ ಬೇಕಾದ ಆಯುಧಗಳು, ಸುಗಂಧದ್ರವ್ಯ, ಕುದುರೆ ಮತ್ತು ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.26ಸೊಲೊಮೋನನು ರಥಗಳನ್ನೂ ಮತ್ತು ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು. ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ, ಉಳಿದವುಗಳನ್ನು ರಥಗಳಿಗೋಸ್ಕರ ನೇಮಿಸಿದ ಪಟ್ಟಣಗಳಲ್ಲಿಯೂ ಇರಿಸಿದನು.27ಅವನ ಮುಖಾಂತರವಾಗಿ ಯೆರೂಸಲೇಮಿನಲ್ಲಿ ಬೆಳ್ಳಿಯು ಸಾಮಾನ್ಯ ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾಗಿ ದೊರೆಯುತ್ತಿತ್ತು.28ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಲೆ ಕೊಂಡುಕೊಂಡು ಬರುತ್ತಿದ್ದರು.29ಐಗುಪ್ತದೇಶದಿಂದ ರಥಗಳನ್ನೂ ಮತ್ತು ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ, ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಮಾರಾಟವಾಗುತ್ತಿದ್ದವು.
11ಸೊಲೊಮೋನನು ಅನ್ಯಜನಾಂಗದ ಪತ್ನಿಯರಿಂದ ದೈವದ್ರೋಹಿಯಾದದ್ದು
1ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು ಮತ್ತು ಹಿತ್ತಿಯರು ಎಂಬ ಜನಾಂಗಗಳ ಸ್ತ್ರೀಯರನ್ನು ಮೋಹಿಸಿದನು.2ಯೆಹೋವನು ಈ ಜನಾಂಗಗಳ ವಿಷಯದಲ್ಲಿ ಇಸ್ರಾಯೇಲರಿಗೆ, <<ನಿಮಗೂ ಅವರಿಗೂ ಕೊಡುವುದು ತೆಗೆದುಕೊಳ್ಳುವುದು ನಡೆಯಬಾರದು, ಅದು ನಡೆಯುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಾರು>> ಎಂದು ಆಜ್ಞಾಪಿಸಿದ್ದರೂ ಸೊಲೊಮೋನನು ಅವರ ಸ್ತ್ರೀಯರಲ್ಲಿ ಅನುರಕ್ತನಾಗಿದ್ದನು.3ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಜನರು ಉಪಪತ್ನಿಯರಿದ್ದರು. ಈ ಸ್ತ್ರೀಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.4ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಪ್ರಾಮಾಣಿಕವಾದ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.5ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನು ಆರಾಧಿಸತೊಡಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.6ಅವನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಸೇವಿಸಿದಂತೆ ಅವನು ಸೇವಿಸಲಿಲ್ಲ.7ಅವನು ಯೆರೂಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಮತ್ತು ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಕಟ್ಟಿಸಿದನು.8ಈ ರೀತಿಯಾಗಿ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಹಾಕುವುದಕ್ಕೂ ಮತ್ತು ಯಜ್ಞವರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು.9ಇಸ್ರಾಯೇಲ್ ದೇವರಾದ ಯೆಹೋವನು ಸೊಲೊಮೋನನಿಗೆ ಎರಡು ಸಾರಿ ಕಾಣಿಸಿಕೊಂಡು,10ಅನ್ಯದೇವತೆಗಳನ್ನು ಸೇವಿಸಲೇ ಬಾರದೆಂದು ಆಜ್ಞಾಪಿಸಿದ್ದರೂ ಅವನು ಆತನ ಆಜ್ಞೆಗಳನ್ನು ಮೀರಿದ್ದರಿಂದ ಆತನು ಅವನ ಮೇಲೆ ಕೋಪಗೊಂಡನು.11ಯೆಹೋವನು ಅವನಿಗೆ, <<ನೀನು ಈ ರೀತಿಯಾಗಿ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.12ಆದರೂ ನಾನು ನಿನ್ನ ತಂದೆಯಾದ ದಾವೀದನನ್ನು ನೆನಸಿ ನಿನ್ನ ಕಾಲದಲ್ಲಿ ಇದನ್ನು ಮಾಡುವುದಿಲ್ಲ. ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು.13ಆದರೆ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು>> ಎಂದು ಹೇಳಿದನು.ರಾಜ್ಯದಲ್ಲಿ ವೈರಿಗಳು ಎದ್ದದ್ದು
14ಯೆಹೋವನು ಎದೋಮ್ಯನೂ, ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧವಾಗಿ ಎಬ್ಬಿಸಿದನು.15ದಾವೀದನಿಗೂ ಎದೋಮಿನವರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಾಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ, ಹತರಾದ ಇಸ್ರಾಯೇಲರನ್ನು ಸಮಾಧಿಮಾಡಿದನು.16ಯೋವಾಬನು ಮತ್ತು ಎಲ್ಲಾ ಇಸ್ರಾಯೇಲರು ಆರು ತಿಂಗಳು ಅಲ್ಲಿಯೇ ಇದ್ದು, ಎದೋಮ್ಯರ ಎಲ್ಲಾ ಗಂಡಸರನ್ನು ಸಂಹರಿಸಿದರು.17ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಜನರು ಎದೋಮ್ಯರ ಜೊತೆಯಲ್ಲಿ ಐಗುಪ್ತಕ್ಕೆ ಓಡಿಹೋಗಬೇಕೆಂದು ಹೊರಟನು.18ಅವರು ಮೊದಲು ಮಿದ್ಯಾನಿಗೂ, ಆ ಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಜನರು ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನೂ ಮತ್ತು ಭೂಮಿಯನ್ನೂ ಕೊಟ್ಟನು.19ಹದದನು ಫರೋಹನ ವಿಶೇಷ ದಯೆಗೆ ಪಾತ್ರನಾದುದರಿಂದ ಫರೋಹನನು ತನ್ನ ಹೆಂಡತಿಯೂ ರಾಣಿಯೂ ಆದ ತಖ್ಪೆನೇಸ್ ಎಂಬಾಕೆಯ ತಂಗಿಯನ್ನು ಅವನಿಗೆ ಮದುವೆಮಾಡಿಕೊಟ್ಟನು.20ಆಕೆಯಲ್ಲಿ ಅವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಪೆನೆಸಳು ಈ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು. ಅಲ್ಲಿ ಅವನು ಫರೋಹನ ಕುಮಾರರ ಜೊತೆಯಲ್ಲಿದ್ದನು.21ದಾವೀದನು ಪೂರ್ವಿಕರ ಬಳಿಗೆ ಸೇರಿದನೆಂದೂ ಸೇನಾಧಿಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನನಿಗೆ, <<ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ, ನನಗೆ ಅಪ್ಪಣೆ ಕೊಡು>> ಅಂದನು.22ಫರೋಹನು ಅವನನ್ನು, <<ನನ್ನ ಬಳಿಯಲ್ಲಿ ನೀನಗೇನು ಕೊರತೆಯಾಯಿತು. ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಬಯಸುತ್ತೀ?>> ಎಂದು ಕೇಳಿದನು. ಅದಕ್ಕೆ ಹದದನು, <<ಏನೂ ಕೊರತೆಯಾಗಿರುವುದಿಲ್ಲ. ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು>> ಎಂದು ಕೇಳಿಕೊಂಡನು.23ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬುವನು.24ದಾವೀದನು ಚೋಬದವರನ್ನು ಸಂಹರಿಸಿದಾಗ ಅವನು ಚೋಬದ ಅರಸನೂ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಜನರನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.25ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಾಯೇಲರಿಗೆ ಮಹಾಬಾಧಕನಾದ ಹದದನಲ್ಲದೆ ಅವನೂ ವೈರಿಯಾಗಿದ್ದನು. ಅವನು ಅರಾಮ್ ದೇಶದಲ್ಲಿ ಆಳುವವನಾಗಿ ಇಸ್ರಾಯೇಲರನ್ನು ಬಹಳವಾಗಿ ದ್ವೇಷಿಸಿದನು.ಯಾರೊಬ್ಬಾಮನು ಸೊಲೊಮೋನನಿಗೆ ವಿರುದ್ಧವಾಗಿ ತಿರುಗಿ ಬಿದ್ದದ್ದು
26ಅರಸನಾದ ಸೊಲೊಮೋನನಿಗೆ ವಿರುದ್ಧವಾಗಿ ಎದ್ದವರಲ್ಲಿ ಅವನ ಸೇವಕನೂ ಚರೇದ ಊರಿನ ಎಫ್ರಾಯೀಮ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನೆಂಬವನು ಮತ್ತೊಬ್ಬನು. ಚೆರೂಗಳೆಂಬ ವಿಧವೆಯು ಅವನ ತಾಯಿ.27ಅವನು ತಿರುಗಿ ಬಿದ್ದದ್ದು ಹೇಗೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲ ಸ್ಥಳಗಳನ್ನು ಭದ್ರಪಡಿಸುತ್ತಿರುವಾಗ,28ಯೌವನಸ್ಥನಾದ ಯಾರೊಬ್ಬಾಮನು ಬಹು ಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಯೋಸೇಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.29ಒಂದು ದಿನ ಯಾರೊಬ್ಬಾಮನು ಯೆರೂಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನಿಗೆ ಎದುರಾದನು. ಅವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.30ಆಗ ಅಹೀಯನು ತಾನು ಹೊದ್ದುಕೊಂಡಿದ್ದ ಹೊಸ ಬಟ್ಟೆಯನ್ನು ತೆಗೆದುಕೊಂಡು ಹರಿದು ಹನ್ನೆರಡು ತುಂಡು ಮಾಡಿದನು.31ಅವನು ಯಾರೊಬ್ಬಾಮನಿಗೆ, <<ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಾಯೇಲ್ ದೇವರಾದ ಯೆಹೋವನು ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು,32ತನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ, ತಾನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದ ನಿಮಿತ್ತವಾಗಿಯೂ ಅವನಿಗೆ ಒಂದೇ ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆ>> ಎಂದು ಹೇಳುತ್ತಾನೆ.33ಇದಲ್ಲದೆ ಆತನು ನಿನಗೆ, <<ಸೊಲೊಮೋನನೂ ಅವರ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ <ಕೆಮೋಷ್> ಮತ್ತು ಅಮ್ಮೋನಿಯರ <ಮಿಲ್ಕೋಮ್> ಇವುಗಳನ್ನು ಆರಾಧಿಸಿದ್ದೂ ಮತ್ತು ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆ ಹೋದದ್ದೇ ಇದಕ್ಕೆ ಕಾರಣ.34ಆದರೂ ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ, ನಾನು ಆರಿಸಿಕೊಂಡ ಸೇವಕನೂ ಆದ ದಾವೀದನ ನಿಮಿತ್ತವಾಗಿ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.35ಆದರೆ ಅದನ್ನು ಅವನ ಮಗನ ಕೈಯಿಂದ ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುವೆನು.36ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.37ನಾನು ನಿನ್ನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸುವೆನು. ನೀನು ಅವರನ್ನು ನಿನ್ನ ಇಷ್ಟದ ಪ್ರಕಾರ ಆಳಬಹುದು.38ನನ್ನ ಸೇವಕನಾದ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ ನೀನೂ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸುವುದಾದರೆ ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು. ಇಸ್ರಾಯೇಲ್ ರಾಜ್ಯವು ನಿನ್ನ ಪಾಲಾಗುವುದು.39ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆತಗ್ಗಿಸುವಂತೆ ಮಾಡಿ ಕುಗ್ಗಿಸುವೆನು. ಆದರೆ ಸದಾಕಾಲಕ್ಕೂ ಅದು ಮುಂದುವರಿಯುವುದಿಲ್ಲ>> ಎಂದು ಹೇಳಿದನು.ಸೊಲೊಮೋನನ ಮರಣ
40ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವುದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು ಐಗುಪ್ತದ ಅರಸನಾದ ಶೀಶಕನ ಬಳಿಗೆ ಹೋಗಿ ಸೊಲೊಮೋನನು ಜೀವದಿಂದಿರುವ ವರೆಗೆ ಅಲ್ಲಿಯೇ ಇದ್ದನು.41ಸೊಲೊಮೋನನ ಉಳಿದ ಎಲ್ಲಾ ಕೃತ್ಯಗಳನ್ನೂ, ಅವನ ಜ್ಞಾನವನ್ನೂ ಕುರಿತು ಸೊಲೊಮೋನನ ಚರಿತ್ರೆ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.42ಅವನು ಯೆರೂಸಲೇಮಿನಲ್ಲಿದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದ ನಂತರ,43ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು.
12ರೆಹಬ್ಬಾಮನನ್ನು ವಿರೋಧಿಸಿದ ಇಸ್ರಾಯೇಲರು
1ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು.2ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನನ್ನು ಇದನ್ನು ಕೇಳಿ ಕರೆಯಿಸಿಕೊಂಡಿದ್ದರು.3ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿ ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,4ಅವನಿಗೆ, <<ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು. ನಿನ್ನ ತಂದೆಯು ನೇಮಿಸಿದ ಬಿಟ್ಟೀಕೆಲಸವನ್ನು ನೀನು ಕಡಿಮೆ ಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ>> ಎಂದು ಹೇಳಿದರು.5ಅದಕ್ಕೆ ಅವನು, <<ನೀವು ಈಗ ಹೋಗಿ ಮೂರು ದಿನಗಳಾದ ನಂತರ ಪುನಃ ಬನ್ನಿರಿ>> ಎಂದು ಉತ್ತರಕೊಟ್ಟನು. ಜನರು ಹಿಂದಿರುಗಿ ಹೋದರು.6ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಯಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.7ಅವರು ಅವನಿಗೆ, <<ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ, ಅವರಿಗೆ ವಿನಯವಾಗಿ ಒಳ್ಳೆಯ ಉತ್ತರ ಕೊಡುವುದಾದರೆ ಅವರು ಯಾವಾಗಲೂ ನಿನ್ನ ಸೇವಕರಾಗಿರುವರು>> ಎಂದರು.8ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,9<<ನನ್ನ ತಂದೆಯು ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು, ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?>> ಎಂದು ಕೇಳಿದನು.10ಅವರು ಅವನಿಗೆ, <<ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು, <ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ.11ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು> ಎಂಬುದಾಗಿ ಹೇಳಬೇಕು>> ಎಂದು ಉತ್ತರಕೊಟ್ಟನು.12ಯಾರೊಬ್ಬಾಮನೂ ಮತ್ತು ಎಲ್ಲಾ ಜನರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನದಲ್ಲಿ ತಿರುಗಿ ಅವನ ಬಳಿಗೆ ಬಂದರು.13ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ,14<<ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು>> ಎಂದು ನುಡಿದನು.15ಅವನು ಜನರ ಮಾತನ್ನು ಕೇಳದೇ ಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶಿಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.16ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, <<ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ>> ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.17ಯೆಹೂದ್ಯ ಪ್ರಾಂತ್ಯದಲ್ಲಿದ್ದ ಇಸ್ರಾಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.18ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಲು ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.19ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.20ಯಾರೊಬ್ಬಾಮನು ಹಿಂತಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲರಿಗೆ ತಿಳಿದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಯಿಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.ಶೆಮಾಯ ನುಡಿದ ಭವಿಷ್ಯ
21ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೂ ರಾಜ್ಯವನ್ನು ತಿರುಗಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.22ಆಗ ದೇವರ ಮನುಷ್ಯನಾದ ಶೆಮಾಯನಿಗೆ ದೈವೋತ್ತರವುಂಟಾಯಿತು.23<<ನೀನು ಹೋಗಿ, ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಮತ್ತು ಉಳಿದ ಜನರಿಗೂ24<ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ> ಎಂದು ಹೇಳಬೇಕು>> ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು.ಯಾರೊಬ್ಬಾಮನು ಬಂಗಾರದ ಮೂರ್ತಿಯನ್ನು ಮಾಡಿಸಿದ್ದು
25ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.26ಅವನು ತನ್ನ ಮನಸ್ಸಿನಲ್ಲಿ, <<ರಾಜ್ಯವು ಪುನಃ ದಾವೀದನ ಕುಟುಂಬದವರಿಗೆ ಆಗುವುದೋ ಏನೋ,27ಜನರು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಸಮರ್ಪಣೆಗಾಗಿ ಹೋಗುವುದಾದರೆ, ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಿತು. ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು>> ಅಂದುಕೊಂಡನು.28ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, <<ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ>> ಎಂದು ಹೇಳಿದನು.29ನಂತರ ಅವನು ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ, ಇನ್ನೊಂದನ್ನು ದಾನಿಗೆ ಕಳುಹಿಸಿದನು.30ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಾಗಿ ದಾನಿಗೆ ಒಯ್ದರು.31ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.32ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, <<ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು>> ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.ಬೇತೇಲಿನ ಯಜ್ಞವೇದಿಗೆ ಶಾಪ
33ಇಸ್ರಾಯೇಲರು ಎಂಟನೆಯ ತಿಂಗಳ ಹದಿನೈದನೆಯ ದಿನದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವ ಇಚ್ಛೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಹಾಕುವುದಕ್ಕಾಗಿ ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.
131ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು2ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, <<ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ>> ಅಂದನು.3ಇದಲ್ಲದೆ ಅವನು, <<ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು>> ಎಂದು ಹೇಳಿದನು.4ಬೇತೇಲಿನ ಯಜ್ಞವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರುದ್ಧವಾಗಿ ನುಡಿದಿದ್ದನ್ನು ಕೇಳಿ, <<ಕೈಚಾಚಿ ಅವನನ್ನು ಹಿಡಿಯಿರಿ>> ಎಂದು ಆಜ್ಞಾಪಿಸಿದನು. ಕೂಡಲೇ ಅವನ ಕೈ ಬತ್ತಿ ಹೋಯಿತು. ಅವನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಲು ಅಗಲ್ಲಿಲ್ಲ.5ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು. ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.6ಅರಸನು ಆ ಮನುಷ್ಯನಿಗೆ, <<ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು>> ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.7ಆಗ ಅರಸನು ಅವನಿಗೆ, <<ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ>> ಎಂದನು.8ಆದರೆ ದೇವರ ಮನುಷ್ಯನು ಅರಸನಿಗೆ, <<ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.9ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಮತ್ತು ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂತಲೂ ನನಗೆ ಯೆಹೋವನ ಅಪ್ಪಣೆಯಾಗಿದೆ>> ಎಂದು ಹೇಳಿದನು.10ಆ ದೇವರ ಮನುಷ್ಯನು ಬಂದ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟು ಹೋದನು.ಬೇತೇಲಿನ ವೃದ್ಧ ಪ್ರವಾದಿ
11ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಮತ್ತು ಅವನು ಅರಸನಿಗೆ ಹೇಳಿದ್ದನ್ನೂ ತಮ್ಮ ತಂದೆಗೆ ತಿಳಿಸಿದರು.12ತಂದೆಯು ಅವರನ್ನು, <<ಅವನು ಯಾವ ದಾರಿಯಿಂದ ಹೋದನು?>> ಎಂದು ಕೇಳಲು ಅವರು ಯೆಹೂದ ದೇಶದವನಾದ ಆ ದೇವರ ಮನುಷ್ಯನು ಹೋದ ದಾರಿಯನ್ನು ತೋರಿಸಿದರು.13ಆಗ ಅವನು ತನ್ನ ಮಕ್ಕಳಿಗೆ, <<ಕತ್ತೆಗೆ ತಡಿಹಾಕಿರಿ>> ಎಂದು ಆಜ್ಞಾಪಿಸಿಲು ಅವರು ತಡಿಹಾಕಿದರು. ಅವನು ಕತ್ತೆಯ ಮೇಲೆ ಕುಳಿತುಕೊಂಡು ಹೊರಟನು.14ದೇವರ ಮನುಷ್ಯನ ಹಿಂದೆ ಹೋಗಿ ಏಲಾ ವೃಕ್ಷದ ಕೆಳಗೆ ಕುಳಿತ್ತಿದ್ದ ಅವನನ್ನು ಕಂಡು, <<ಯೆಹೂದದಿಂದ ಬಂದ ದೇವರ ಮನುಷ್ಯನು ನೀನೋ?>> ಎಂದು ಕೇಳಿದನು. ಅವನು ಹೌದೆಂದನು.15ಆಗ ಆ ಮುದುಕನು ಅವನಿಗೆ, <<ನೀನು ನನ್ನ ಮನೆಗೆ ಬಂದು ಊಟಮಾಡು>> ಎಂದು ಹೇಳಿದನು.16ಅದಕ್ಕೆ ಅವನು, <<ನಾನು ನಿನ್ನ ಸಂಗಡ ಬರವುದಿಲ್ಲ ಮತ್ತು ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.17ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ, ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದು ನನಗೆ ಯೆಹೋವನ ಅಪ್ಪಣೆಯಾಗಿದೆ>> ಎಂದು ಉತ್ತರಕೊಟ್ಟನು.18ಆಗ ಆ ಮುದುಕನು, <<ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ>> ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.19ದೇವರ ಮನುಷ್ಯನು ಆ ಪ್ರವಾದಿಯ ಮಾತನ್ನು ನಂಬಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.20ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ತನ್ನ ಮನೆಗೆ ಕರೆದುಕೊಂಡು ಬಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು.21ಅವನು ಆ ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, <<ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ,22ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೋಸ್ಕರ ಹಿಂದಿರುಗಿ ಬಂದದ್ದರಿಂದ, ನಿನ್ನ ಶವವು ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ>> ಅಂದನು.23ಅನ್ನಪಾನಗಳನ್ನು ತೆಗೆದುಕೊಂಡ ನಂತರ ಅವನು ತಾನು ಕರೆದುಕೊಂದು ಬಂದಿದ್ದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು.24ದೇವರ ಮನುಷ್ಯನು ಸ್ವಲ್ಪ ದೂರ ಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದು ಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು. ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.25ಹಾದುಹೋಗುವವರು ಶವವು ದಾರಿಯಲ್ಲಿ ಬಿದ್ದಿರುವುದನ್ನೂ, ಸಿಂಹವು ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡು ವೃದ್ಧ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು.26ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ ಅವರಿಗೆ, <<ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಆಜ್ಞೆಗೆ ಅವೀಧೆಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು>> ಎಂದು ಹೇಳಿದನು.27ಅವನು, <<ಕತ್ತೆಗೆ ತಡಿಹಾಕಿರಿ>> ಎಂದು ಮಕ್ಕಳಿಗೆ ಆಜ್ಞಾಪಿಸಲು ಅವರು ತಡಿಹಾಕಿದರು.28ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.29ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಣಿಟ್ಟು, ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ, ತನ್ನ ಊರಿಗೆ ತೆಗೆದುಕೊಂಡು ಬಂದು,30ತನ್ನ ಸ್ಮಶಾನಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, <<ಅಯ್ಯೋ, ನನ್ನ ಸಹೋದರನೇ!>> ಎಂದು ಗೋಳಾಡಿದರು.31ಅನಂತರ ಅವನು ತನ್ನ ಮಕ್ಕಳಿಗೆ, <<ನಾನು ಸತ್ತಾಗ ನನ್ನ ಶವವನ್ನು ದೇವರ ಮನುಷ್ಯನ ಶವವಿರುವಲ್ಲೇ ಸಮಾಧಿಮಾಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳು ಇರುವಲ್ಲೇ ಇಡಿರಿ.32ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರುದ್ಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳ ವಿರುದ್ಧವಾಗಿಯೂ, ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು>> ಎಂದನು.33ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.34ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.
14ಅಬೀಯನ ಅಸ್ವಸ್ಥತೆ ಮತ್ತು ಅಹೀಯನ ಪ್ರವಾದನೆ
1ಆ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಬೀಯನು ಅಸ್ವಸ್ಥನಾದನು.2ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, <<ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಹಾಕಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.3ನೀನು ಹತ್ತು ರೊಟ್ಟಿಗಳನ್ನೂ, ಒಂದಷ್ಟು ಸಿಹಿಪದಾರ್ಥವನ್ನೂ ಮತ್ತು ಒಂದು ಕುಪ್ಪೆ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಹುಡುಗನಿಗೆ ಏನಾಗುವುದೆಂದು ಅವನು ತಿಳಿಸುವನು>> ಎಂದು ಹೇಳಿದನು.4ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿ ಹೋಗಿದ್ದರಿಂದ ಅವನಿಗೆ ಏನು ಕಾಣಿಸುತ್ತಿರಲಿಲ್ಲ.5ಆದರೆ ಯೆಹೋವನು ಅವನಿಗೆ, <<ಯಾರೊಬ್ಬಾಮನ ಹೆಂಡತಿಯು ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋಕ್ತಿಯನ್ನು ಕೇಳುವುದಕ್ಕೆ ತನ್ನನ್ನು ಅನ್ಯಳ ಹಾಗೆ ವೇಷಮರೆಸಿಕೊಂಡು ಬರುತ್ತಾಳೆಂದೂ, ಆಕೆಗೆ ಇಂಥಿಂಥ ಉತ್ತರ ಕೊಡಬೇಕು>> ಎಂದು ತಿಳಿಸಿದ್ದನು.6ಆಕೆಯು ಅಹೀಯನ ಮನೆಯನ್ನು ಪ್ರವೇಶಿಸುತ್ತಿರುವಾಗಲೇ ಅಹೀಯನು ಆಕೆಯ ಕಾಲು ಸಪ್ಪಳವನ್ನು ಕೇಳಿ, <<ಯಾರೊಬ್ಬಾಮನ ಹೆಂಡತಿಯೇ ಬಾ. ಯಾಕೆ ನಿನ್ನನ್ನು ಅನ್ಯಳೆಂದು ತೋರ್ಪಡಿಸಿಕೊಳ್ಳುತ್ತೀ? ನಿನಗೆ ಕಠಿಣವಾದ ಉತ್ತರ ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.7ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಅಪ್ಪಣೆಯನ್ನು ತಿಳಿಸು. ಆತನು ಅವನಿಗೆ, <ನಾನು ನಿನ್ನನ್ನು ಜನರ ಮಧ್ಯದಿಂದ ಉನ್ನತಸ್ಥಾನಕ್ಕೆ ತಂದೆನು. ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದೆನು.8ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣ ಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ನನ್ನನ್ನು ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ.9ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.10ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.11ಅವರು ನಿರ್ನಾಮವಾಗುವರು. ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ>. ಇದು ಯೆಹೋವನಾದ ನನ್ನ ಮಾತು. ನೀನು ಎದ್ದು ನಿನ್ನ ಮನೆಗೆ ಹೋಗು.12ನೀನು ಪಟ್ಟಣದೊಳಗೆ ಕಾಲಿಡುವಷ್ಟರಲ್ಲಿ ಹುಡುಗನು ಸಾಯುವನು.13ಇಸ್ರಾಯೇಲರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಅವನು ಮಾತ್ರ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಅವನೊಬ್ಬನೇ ಸಮಾಧಿಹೊಂದುವನು.14ಯೆಹೋವನು ಇಸ್ರಾಯೇಲರನ್ನು ಆಳಲು ಬೇರೊಬ್ಬ ಅರಸನನ್ನು ನೇಮಿಸುವನು. ಅವನು ಕೂಡಲೇ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು. ಇನ್ನು ಏನೇನು ಸಂಭವಿಸುವದೋ?15ಯೆಹೋವನು ಇಸ್ರಾಯೇಲರನ್ನು ಹೊಡೆಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದ್ದರಿಂದ ಆತನು ಅವರನ್ನು ಅವರ ಪೂರ್ವಿಕರಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದುರಿಸಿಬಿಡುವನು.16ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು>> ಎಂದು ಆಕೆಗೆ ಹೇಳಿದನು.ಅಬೀಯ ಮತ್ತು ಯಾರೊಬ್ಬಾಮನ ಮರಣ
17ಯಾರೊಬ್ಬಾಮನ ಹೆಂಡತಿಯು ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟ ಕೂಡಲೇ ಹುಡುಗನು ಸತ್ತನು.18ಯೆಹೋವನು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಎಲ್ಲಾ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು.19ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ಮತ್ತು ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.20ಅವನು ಇಪ್ಪತ್ತೆರಡು ವರ್ಷ ಆಳಿ ಪೂರ್ವಿಕರ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗನಾದ ನಾದಾಬನು ಅರಸನಾದನು.ಯೆಹೂದ್ಯರ ಅರಸನಾದ ರೆಹಬ್ಬಾಮನು
21ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಲ್ವತ್ತೊಂದು ವರ್ಷದವನಾಗಿದ್ದು, ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷಗಳ ಕಾಲ ಆಳ್ವಿಕೆ ಮಾಡಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.22ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ತಮ್ಮ ಪೂರ್ವಿಕರಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.23ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.24ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿರುವ ದೇವದಾಸ, ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ಆಚರಿಸುವವರಾದರು.25ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರುದ್ಧವಾಗಿ ದಂಡೆತ್ತಿ ಬಂದನು.26ಅವನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಹಾಗೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.27ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.28ಅರಸನು ಯೆಹೋವನ ಆಲಯಕ್ಕೆ ಹೋಗುವಾಗಲೆಲ್ಲಾ ಅವರು ಅವುಗಳನ್ನು ಹಿಡಿದುಕೊಳ್ಳುವರು. ಅಲ್ಲಿಂದ ಅರಸನು ಹಿಂತಿರುಗಿ ಹೋದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುವರು.29ರೆಹಬ್ಬಾಮನ ಉಳಿದ ಚರಿತ್ರೆಯು ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.30ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.31ರೆಹಬ್ಬಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.
15ಯೆಹೂದದ ಅರಸನಾದ ಅಬೀಯಾಮ
1ನೆಬಾಟನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಅರಸನಾದನು.2ಅವನು ಯೆರೂಸಲೇಮಿನಲ್ಲಿ ಮೂರು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.3ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ.4ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಆರಿಸಲಿಲ್ಲ.5ಯೆರೂಸಲೇಮನ್ನೂ ಅವನ ಸಂತಾನವನ್ನೂ ಉಳಿಸಿದನು.6ರೆಹಬ್ಬಾಮನಿಗೂ ಮತ್ತು ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.7ಅಬೀಯಾಮನ ಉಳಿದ ಚರಿತ್ರೆಯೂ ಮತ್ತು ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಅಬೀಯಾಮನಿಗೂ ಮತ್ತು ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.8ಅಬೀಯಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು.ಯೆಹೂದದ ಅರಸನಾದ ಆಸ
9ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಆಸನು ಯೆಹೂದದ ಅರಸನಾದನು.10ಅವನು ಯೆರೂಸಲೇಮನ್ನು ನಲ್ವತ್ತೊಂದು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.11ಅವನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.12ಅವನು ವಿಟರನ್ನು ದೇಶದಿಂದ ಹೊರಡಿಸಿ, ತನ್ನ ಹಿರಿಯರು ಮಾಡಿಸಿಟ್ಟ ವಿಗ್ರಹಗಳನ್ನೆಲ್ಲಾ ತೆಗೆದುಹಾಕಿದನು.13ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು.14ಅವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಪ್ರಾಮಾಣಿಕವಾದ ಮನಸ್ಸಿನಿಂದ ಸತ್ಯಮಾರ್ಗದಲ್ಲಿ ಯೆಹೋವನಿಗೆ ನಡೆದುಕೊಂಡನು.15ಇದಲ್ಲದೆ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನು ಪಾತ್ರೆಗಳನ್ನೂ ಯೆಹೋವನ ಆಲಯದಲ್ಲಿ ತಂದಿಟ್ಟನು.16ಅವನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು17ಇಸ್ರಾಯೇಲರ ಅರಸನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.18ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.19ಆತನು ಅವನಿಗೆ <<ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಾದಂತೆ, ಇಗೋ ನಿನಗೆ ಬೆಳ್ಳಿ ಮತ್ತು ಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು>> ಎಂದು ಹೇಳಿದನು.20ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.21ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆಯನ್ನು ಕಟ್ಟಿಸುವುದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲಿಯೇ ವಾಸಮಾಡಲು ತೊಡಗಿದನು.22ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು, ಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.23ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಅವನು ಪಟ್ಟಣಗಳನ್ನು ಕಟ್ಟಿಸಿದ ಸಂಗತಿಗಳೂ, ಅವನ ಇತರ ಕಾರ್ಯಗಳು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು.24ಅವನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು.ಇಸ್ರಾಯೇಲರ ಅರಸನಾದ ನಾದಾಬನು
25ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.26ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.27ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೆಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು.28ಬಾಷನು ಯೆಹೂದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.29ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.30ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದ್ದರಿಂದ ಹೀಗಾಯಿತು.31ನಾದಾಬನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.32ಆಸನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.ಇಸ್ರಾಯೇಲರ ಅರಸನಾದ ಬಾಷನು
33ಯೆಹೂದದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅಹೀಯನ ಮಗನಾದ ಬಾಷನು ಇಸ್ರಾಯೇಲರ ಅರಸನಾಗಿ ತಿರ್ಚದಲ್ಲಿದ್ದು, ಇಪ್ಪತ್ತನಾಲ್ಕು ವರ್ಷ ಆಳ್ವಿಕೆ ಮಾಡಿದನು.34ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
161ಆಗ ಯೆಹೋವನು ಹನಾನೀಯನ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೆ ಹೇಳಿದ್ದೇನೆಂದರೆ,2<<ನಾನು ನಿನ್ನನ್ನು ಧೂಳಿನಿಂದ ಎತ್ತಿ, ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದರೂ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿರುವೆ. ಅವರ ಪಾಪದ ಮೂಲಕವಾಗಿ ನನಗೆ ಕೋಪವನ್ನೆಬ್ಬಿಸಿದ್ದಿ.3ಆದುದರಿಂದ ನಿನ್ನನ್ನೂ ಮತ್ತು ನಿನ್ನ ಮನೆಯವರನ್ನು ನಾಶಮಾಡುವೆನು. ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನಗೂ, ನಿನ್ನ ಮನೆಯವರಿಗೂ ಆಗುವುದು.4ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವವು>> ಎಂಬುದೇ.5ಬಾಷನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.6ಅವನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಏಲನು ಅರಸನಾದನು.7ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು.ಇಸ್ರಾಯೇಲರ ಅರಸನಾದ ಏಲನು
8ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.9ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೆಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ ಜಿಮ್ರಿಯು ಅಲ್ಲಿಗೆ ಹೋದನು.10ಜಿಮ್ರಿಯು ಏಲನ ಮೇಲೆ ಬಿದ್ದು ಅವನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.11ಅವನು ಸಿಂಹಾಸನದ ಮೇಲೆ ಕುಳಿತು ಆಳತೊಡಗಿದ ಕೂಡಲೇ ಬಾಷನ ಮನೆಯವರನ್ನೂ ಅವನ ಬಂಧು ಮಿತ್ರರನ್ನೂ ಸಂಹರಿಸಿದನು. ಅವರಲ್ಲಿ ಒಬ್ಬ ಗಂಡಸನ್ನೂ ಉಳಿಸಲಿಲ್ಲ.12ಬಾಷನೂ ಹಾಗು ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದರು.13ಆದುದರಿಂದ ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ಆಗುವ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.14ಏಲನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.ಇಸ್ರಾಯೇಲರ ಅರಸನಾದ ಜಿಮ್ರಿಯು
15ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ವರ್ಷ ಆಳ್ವಿಕೆ ಮಾಡಿದನು. ಆ ಸಮಯದಲ್ಲಿ ಇಸ್ರಾಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು.16ಜಿಮ್ರಿಯು ಅರಸನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದನೆಂಬ ವರ್ತಮಾನವು ಪಾಳೆಯದಲ್ಲಿದ್ದ ಇಸ್ರಾಯೇಲರಿಗೆ ಮುಟ್ಟಿತು. ಅವರು ಅದೇ ದಿನ ಅಲ್ಲಿಯೇ ಸೈನ್ಯಾಧಿಪತಿಯಾದ ಒಮ್ರಿಯನ್ನು ತಮ್ಮ ಅರಸನನ್ನಾಗಿ ನೇಮಿಸಿಕೊಂಡರು.17ಒಮ್ರಿಯೂ ಅವನ ಜೊತೆಯಲ್ಲಿದ್ದ ಎಲ್ಲಾ ಇಸ್ರಾಯೇಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.18ಪಟ್ಟಣವು ಅವರ ವಶವಾದುದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹಕ್ಕೆ ಹೋಗಿ, ಅರಮನೆಗೆ ಬೆಂಕಿ ಹೊತ್ತಿಸಿ ಸುಟ್ಟುಕೊಂಡು ಸತ್ತನು.19ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದ ಹೀಗಾಯಿತು.20ಜಿಮ್ರಿಯ ಉಳಿದ ಚರಿತ್ರೆಯೂ ಅವನ ಒಳಸಂಚೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.21ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು. ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು. ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.22ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನೀಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಮರಣ ಹೊಂದಿದ್ದರಿಂದ ಒಮ್ರಿಯೇ ಅರಸನಾದನು.ಇಸ್ರಾಯೇಲರ ಅರಸನಾದ ಒಮ್ರಿಯು
23ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿಯು ಇಸ್ರಾಯೇಲರ ಅರಸನಾಗಿ ಹನ್ನೆರಡು ವರ್ಷ ಆಳ್ವಿಕೆ ಮಾಡಿದನು. ಆರು ವರ್ಷಗಳ ವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.24ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು.25ಒಮ್ರಿಯು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನಾಗಿದ್ದನು.26ಇಸ್ರಾಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನಿಗೆ ಕೋಪ ಬರಿಸುವಂತೆ ಅವರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಅವನೂ ನಡೆದನು.27ಅವನ ಉಳಿದ ಚರಿತ್ರೆಯೂ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.28ಒಮ್ರಿಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯಪಟ್ಟಣದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಅಹಾಬನು ಅರಸನಾದನು.ಇಸ್ರಾಯೇಲರ ಅರಸನಾದ ಅಹಾಬ
29ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳ್ವಿಕೆ ಮಾಡಿದನು.30ಅವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು31ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.32ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.33ಇದಲ್ಲದೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆ ಇನ್ನೂ ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ, ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಬರುವಂತೆ ಮಾಡಿದ.34 ಅವನ ಕಾಲದಲ್ಲಿ ಬೇತೇಲಿನವನಾದ ಹೀಯೇಲನು ಯೆರಿಕೋ ಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕಿದಾಗ ಹಿರಿಯ ಮಗನಾದ ಅಬೀರಾಮನನ್ನೂ ಬಾಗಿಲುಗಳನ್ನಿರಿಸಿದಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.
17ಕಾಗೆಗಳು ಪ್ರವಾದಿಯಾದ ಎಲೀಯನನ್ನು ಪೋಷಿಸಿದ್ದು
1ಗಿಲ್ಯಾದಿನ ತಿಷ್ಬೀಯ ಊರಿನವನಾದ ತಿಷ್ಬೀಯನಾದ ಎಲೀಯ ಎಂಬುವವನು ಅಹಾಬನಿಗೆ, <<ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,2ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳ ವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವುದಿಲ್ಲ>> ಅಂದನು.3ತರುವಾಯ ಯೆಹೋವನು ಎಲೀಯನಿಗೆ, <<ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್ ಹೊಳೆಯ ಆಚೆಯಲ್ಲಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.4ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ>> ಎಂದು ಹೇಳಿದನು.5ಎಲೀಯನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವದಿಕ್ಕಿರುವ ಕೆರೀತ್ ಹಳ್ಳದ ಬಳಿಗೆ ಹೋಗಿ ಅಲ್ಲಿ ವಾಸಮಾಡ ತೊಡಗಿದನು.6ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.7ದೇಶದಲ್ಲಿ ಮಳೆಯಿಲ್ಲದ್ದರಿಂದ ಕೆಲವು ದಿನಗಳಾದನಂತರ ಹಳ್ಳವು ಬತ್ತಿಹೋಯಿತು.ಎಲೀಯನನ್ನು ಪೋಷಿಸಿದ ಚಾರೆಪ್ತಾ ಊರಿನ ವಿಧವೆ
8ಆಗ ಎಲೀಯನಿಗೆ ಯೆಹೋವನ ಮಾತು ಕೇಳಿ ಬಂತು,9ಆತನು ಅವನಿಗೆ, <<ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಮಾಡು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ>> ಅಂದನು.10ಅವನು ಅಲ್ಲಿಂದ ಹೊರಟು ಚಾರೆಪ್ತಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, <<ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ>> ಎಂದು ಹೇಳಿದನು.11ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, <<ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ>> ಅಂದನು.12ಆಕೆಯು ಅವನಿಗೆ, <<ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ>> ಎಂದು ಉತ್ತರಕೊಟ್ಟಳು.13ಆಗ ಎಲೀಯನು ಆಕೆಗೆ, <<ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.14ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, <ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ> >> ಎಂದು ಹೇಳುತ್ತಾನೆ.15ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು.16ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.ಎಲೀಯನು ವಿಧವೆಯ ಮಗನನ್ನು ಬದುಕಿಸಿದ್ದು
17ಕೆಲವು ದಿನಗಳಾದನಂತರ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಹುಡುಗನಿಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು.18ಆಗ ಆ ಸ್ತ್ರೀಯು ಎಲೀಯನಿಗೆ, <<ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?>> ಎಂದಳು.19ಅವನು ಆಕೆಗೆ, <<ನಿನ್ನ ಮಗನನ್ನು ನನಗೆ ಕೊಡು>> ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು.20ಅನಂತರ ಅವನು ಯೆಹೋವನಿಗೆ, <<ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನು?>> ಎಂದು ಕೇಳಿದನು.21ಆನಂತರ ಹುಡುಗನ ಮೇಲೆ ಮೂರು ಸಾರಿ ಬೋರಲು ಬಿದ್ದು, <<ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರುಗಿ ಬರುವಂತೆ ಮಾಡು>> ಎಂಬುದಾಗಿ ಆತನಿಗೆ ಮೊರೆಯಿಟ್ಟನು.22ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದ್ದರಿಂದ ಹುಡುಗನ ಪ್ರಾಣವು ತಿರುಗಿ ಬಂದು ಅವನು ಜೀವಿಸಿದನು.23ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡು ಹೋಗಿ, ಅವನ ತಾಯಿಗೆ ಒಪ್ಪಿಸಿ, <<ಇಗೋ, ನೋಡು ನಿನ್ನ ಮಗನು ಜೀವಿಸುತ್ತಿದ್ದಾನೆ>> ಅಂದನು.24ಆಗ ಆಕೆಯು ಎಲೀಯನಿಗೆ, <<ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು>> ಎಂದು ಹೇಳಿದಳು.
18ಎಲೀಯನು ಮತ್ತು ಓಬದ್ಯನು
1ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, <<ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ>> ಎಂದನು.2ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ,3ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬುವನನ್ನು ಕರೇಕಳುಹಿಸಿದನು.4ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.5ಅಹಾಬನು ಅವನಿಗೆ, <<ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು>> ಎಂದು ಹೇಳಿದನು.6ಅವರು ಸಂಚಾರಕ್ಕಾಗಿ ದೇಶವನ್ನು ಎರಡು ಭಾಗ ಮಾಡಿ ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ ಇನ್ನೊಂದು ಕಡೆ ತಾನೇ ಹೊರಟುಹೋದನು.7ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, <<ನೀನು ನನ್ನ ಸ್ವಾಮಿಯಾದ ಎಲೀಯನೋ?>> ಎಂದು ಕೇಳಿದನು.8ಅದಕ್ಕೆ ಅವನು, <<ಹೌದು, ನೀನು ಹೋಗಿ ನಿನ್ನ ಒಡೆಯನಿಗೆ, <ಎಲೀಯನು ಬಂದಿದ್ದಾನೆ> ಎಂದು ಹೇಳು>> ಎಂದನು.9ಅದಕ್ಕೆ ಓಬದ್ಯನು, <<ಅಹಾಬನು ನನ್ನನ್ನು ಕೊಲ್ಲುವ ಹಾಗೆ ನೀನು ನನ್ನನ್ನು ಅವನ ಕೈಗೆ ಒಪ್ಪಿಸುವುದೇಕೆ? ನಾನೇನು ಪಾಪಮಾಡಿದೆನು?10ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು <ಎಲೀಯನು ನಮ್ಮಲ್ಲಿರುವುದಿಲ್ಲ> ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.11ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು ಎಂಬುದಾಗಿ ಆಜ್ಞಾಪಿಸುವುದೇನು?12ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?13ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.14ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆ ಎಂಬುದಾಗಿ ನಿನ್ನ ಒಡೆಯನಿಗೆ ತಿಳಿಸು ಎಂದು ಆಜ್ಞಾಪಿಸುತ್ತಿರುವೆಯಲ್ಲಾ. ಅವನು ನನ್ನನ್ನು ಕೊಲ್ಲುವನಲ್ಲವೋ?>> ಎಂದು ಉತ್ತರಕೊಟ್ಟನು.15ಆಗ ಎಲೀಯನು ಅವನಿಗೆ, <<ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ನಾನು ಈ ಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು>> ಅಂದನು.ಕರ್ಮೆಲ್ ಬೆಟ್ಟದಲ್ಲಿ ಎಲೀಯನು
16ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋಗಿ17ಅವನನ್ನು ಕಂಡಕೂಡಲೆ, <<ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?>> ಅಂದನು.18ಅದಕ್ಕೆ ಅವನು, <<ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.19ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು>> ಎಂದು ಹೇಳಿದನು.20ಅಹಾಬನು ಇಸ್ರಾಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು.21ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, <<ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ>> ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು.22ಮತ್ತು ಎಲೀಯನು ಅವರಿಗೆ, <<ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ.23ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ ಅವುಗಳಲ್ಲಿ ಒಂದನ್ನು ಆರಿಸಿಕೊಂಡು ಕಡಿದು, ತುಂಡು ಮಾಡಿ, ಕಟ್ಟಿಗೆಯ ಮೇಲಿಡಲಿ. ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು24ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ, ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದೂ ನಿರ್ಣಯಿಸೋಣ>> ಅಂದನು. ಎಲ್ಲಾ ಜನರು, <<ಸರಿ ನೀನು ಹೇಳಿದಂತೆಯೇ ಆಗಲಿ>> ಎಂದು ಉತ್ತರಕೊಟ್ಟರು.25ಆಗ ಅವನು ಬಾಳನ ಪ್ರವಾದಿಗಳಿಗೆ, <<ನೀವು ಹೆಚ್ಚು ಜನ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಆದರೆ ಬೆಂಕಿಯನ್ನು ಹೊತ್ತಿಸಬಾರದು>> ಅಂದನು.26ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, <<ಬಾಳನೇ ನಮಗೆ ಕಿವಿಗೊಡು>> ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.27ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, <<ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು>> ಎಂದು ಹೇಳಿದನು.28ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ದತಿಯ ಪ್ರಕಾರ ಈಟಿ ಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು.29ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.30ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿ ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿದನು.31ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,32ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗೆಸಿ ಕಾಲುವೆ ಮಾಡಿಸಿದನು.33ಇದಲ್ಲದೆ ಕಟ್ಟಿಗೆಯನ್ನು ಯಜ್ಞವೇದಿಯ ಮೇಲೆ ಕ್ರಮಪಡಿಸಿ, ಹೋರಿಯನ್ನು ವಧಿಸಿ ತುಂಡು ಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ, <<ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಸುರಿಯಿರಿ>> ಎಂದು ಆಜ್ಞಾಪಿಸಿದನು.34ಅವರು ತೆಗೆದುಕೊಂಡು ಬರಲು, <<ಇನ್ನೊಂದು ಸಾರಿ ತನ್ನಿರಿ>> ಎಂದು ಹೇಳಿದನು. ತಿರುಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಿಲು ಅವರು ಮತ್ತೊಮ್ಮೆ ತಂದು ಸುರಿದರು35ನೀರು ಯಜ್ಞವೇದಿಯ ಸುತ್ತಲೂ ತುಂಬಿ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.36ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, <<ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.37ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು>> ಎಂದು ಪ್ರಾರ್ಥಿಸಿದನು.38ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.39ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, <<ಯೆಹೋವನೇ ದೇವರು! ಯೆಹೋವನೇ ದೇವರು!>> ಎಂದು ಕೂಗಿದರು.40ಆಗ ಎಲೀಯನು ಅವರಿಗೆ, <<ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು>> ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.ಎಲೀಯನು ಮಳೆಗಾಗಿ ಪ್ರಾರ್ಥಿಸಿದ್ದು
41ಅನಂತರ ಅವನು ಅಹಾಬನಿಗೆ, <<ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ, ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ>> ಅಂದನು.42ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ಬೆಟ್ಟದ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.43ಅವನು ತನ್ನ ಸೇವಕನಿಗೆ, <<ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು>> ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, <<ಏನೂ ಕಾಣುವುದಿಲ್ಲ>> ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.44ಏಳನೆಯ ಸಾರಿ ಸೇವಕನು, <<ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಿದೆ>> ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, <<ನೀನು ಹೋಗಿ ಅಹಾಬನಿಗೆ, <ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು> ಎಂದು ಹೇಳು>> ಅಂದನು.45ಸ್ವಲ್ಪ ಹೊತ್ತಿನಲ್ಲಿಯೇ ಆಕಾಶವು ಮೋಡಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಇಜ್ರೇಲಿಗೆ ಹೋದನು.46ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.
19ಹೋರೇಬಿನಲ್ಲಿ ಎಲೀಯನು
1ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.2ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ>> ಎಂದು ಹೇಳಿಕಳುಹಿಸಿದಳು.3ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.4ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, <<ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ>> ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.5ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, <<ಎದ್ದು ಊಟ ಮಾಡು>> ಎಂದು ಹೇಳಿದನು.6ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು.7ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, <<ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ>> ಎಂದನು.8ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ9ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು.ದೇವರು ಹೋರೇಬಿನಲ್ಲಿ ಎಲೀಯನಿಗೆ ಕಾಣಿಸಿಕೊಂಡಿದ್ದು
ಆಗ ಅವನಿಗೆ ಯೆಹೋವನಿಂದ, <<ಎಲೀಯನೇ ನೀನು ಇಲ್ಲೇನು ಮಾಡುತ್ತೀ?>> ಎಂಬ ವಾಣಿಯು ಕೇಳಿಸಿತು.
10ಅವನು ಅದಕ್ಕೆ, <<ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ>> ಎಂದು ಉತ್ತರಕೊಟ್ಟನು.11ಆಗ ಪುನಃ, <<ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು>> ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.12ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು,13ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, <<ಎಲೀಯನೇ ನೀನು ಇಲ್ಲೇನು ಮಾಡುತ್ತೀ?>> ಎಂಬ ವಾಣಿಯು ಕೇಳಿಸಿತು.14ಅದಕ್ಕೆ ಅವನು, <<ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ>> ಎಂದು ಉತ್ತರಕೊಟ್ಟನು.15ಆಗ ಯೆಹೋವನು ಅವನಿಗೆ, <<ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು, ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು.16ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.17ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.18ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು>> ಎಂದು ಹೇಳಿದನು.ಎಲೀಷನು ಎಲೀಯನ ಸೇವಕನಾಗಿದ್ದು
19ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.20ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, <<ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು>> ಅಂದನು. ಅದಕ್ಕೆ ಎಲೀಯನು <<ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?>> ಎಂದು ಉತ್ತರಕೊಟ್ಟನು.21ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.
20ಅಹಾಬನು ಅರಾಮ್ಯರನ್ನು ಎರಡು ಸಾರಿ ಸೋಲಿಸಿದ್ದು
1ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಅರಸರೊಂದಿಗೆ ಹೊರಟು ಬಂದು ಸಮಾರ್ಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.2ಅವನು ಆ ಪಟ್ಟಣದಲ್ಲಿದ್ದ ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,3<<ನಿನ್ನ ಬೆಳ್ಳಿಬಂಗಾರ ನನ್ನದು. ನಿನ್ನ ಪ್ರಿಯ ಹೆಂಡತಿ ಮಕ್ಕಳು ನನ್ನವರೇ ಎಂದು ತಿಳಿದುಕೋ>> ಎಂಬುದಾಗಿ ತಿಳಿಸಿದನು.4ಅದಕ್ಕೆ ಇಸ್ರಾಯೇಲರ ಅರಸನು, <<ನನ್ನ ಒಡೆಯನಾದ ಅರಸನೇ, ನೀನು ಹೇಳಿದಂತೆ ನಾನು ನಿನ್ನವನೇ, ನನಗಿರುವುದೆಲ್ಲವೂ ನಿನ್ನದೇ>> ಎಂದು ಉತ್ತರಕೊಟ್ಟು ಕಳುಹಿಸಿದನು.5ಆ ದೂತರು ತಿರುಗಿ ಅಹಾಬನ ಬಳಿಗೆ ಬಂದು, <<ನಿನ್ನ ಬೆಳ್ಳಿಬಂಗಾರವನ್ನೂ ನಿನ್ನ ಪ್ರಿಯ ಹೆಂಡತಿ ಮಕ್ಕಳನ್ನು ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿಕಳುಹಿಸಿದೆನಲ್ಲಾ.6ನಾಳೆ ಇಷ್ಟು ಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು, ಅವರು ನಿನ್ನ ಮತ್ತು ನಿನ್ನ ಸೇವಕರ ಮನೆಗಳನ್ನು ಶೋಧಿಸಿ ನಿಮಗೆ ಇಷ್ಟವಾಗಿರುವವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ಅನ್ನುತ್ತಾನೆ>> ಎಂದು ತಿಳಿಸಿದರು.7ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, <<ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, <ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು> ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ>> ಎಂದು ಹೇಳಿದನು.8ಆಗ ಎಲ್ಲಾ ಹಿರಿಯರೂ ಮತ್ತು ಜನರೂ ಅವನಿಗೆ, <<ನೀನು ಈ ಮಾತಿಗೆ ಒಪ್ಪಬೇಡ>> ಎಂದರು.9ಆದುದರಿಂದ ಅವನು ಬಂದಂಥ ದೂತರ ಮುಖಾಂತರವಾಗಿ ಬೆನ್ಹದದನಿಗೆ, <<ನನ್ನ ಒಡೆಯನೇ, ಅರಸನೇ, ನಾನು ನಿನ್ನ ಮೊದಲನೆಯ ಮಾತಿಗೆ ಒಪ್ಪಿ ಅದರಂತೆ ಮಾಡಲು ಸಿದ್ಧನಾಗಿರುತ್ತೇನೆ. ಆದರೆ ಎರಡನೆಯ ಮಾತಿಗೆ ಒಪ್ಪಲಾರೆನು>> ಎಂದು ಹೇಳಿ ಕಳುಹಿಸಿದನು. ದೂತರು ಬಂದು ಈ ಮಾತನ್ನು ಬೆನ್ಹದದನಿಗೆ ತಿಳಿಸಿದರು.10ಆಗ ಅವನು ಅಹಾಬನಿಗೆ, <<ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ>> ಎಂದು ಹೇಳಿಕಳುಹಿಸಿದನು.11ಇಸ್ರಾಯೇಲರ ಅರಸನು ಬಂದ ದೂತರಿಗೆ, <<ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ>> ಎಂದನು.12ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ ಪಟ್ಟಣಕ್ಕೆ ಮುತ್ತಿಗೆ ಹಾಕುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.13ಆಗ ಒಬ್ಬ ಪ್ರವಾದಿಯು ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ, <<ಈ ಮಹಾ ಸಮೂಹವನ್ನು ನೋಡಿದೆಯಾ, ನಾನು ಯೆಹೋವನೇ ಎಂಬುದು ನಿನಗೆ ಗೊತ್ತಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ>> ಎಂಬುದಾಗಿ ಹೇಳಿದನು.14ಅಹಾಬನು ಅವನನ್ನು, <<ಇದು ಯಾರ ಮುಖಾಂತರವಾಗಿ ಆಗುವುದು?>> ಎಂದು ಕೇಳಿದ್ದಕ್ಕೆ ಅವನು, <<ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳ ಮುಖಾಂತರವಾಗಿ ಆಗುವುದು ಎಂದು ಯೆಹೋವನು ಅನ್ನುತ್ತಾನೆ>> ಎಂದು ಉತ್ತರಕೊಟ್ಟನು. ಅಹಾಬನು ಪುನಃ ಅವನನ್ನು, <<ಯುದ್ಧ ಪ್ರಾರಂಭಮಾಡತಕ್ಕವರು ಯಾರು?>> ಎಂದು ಕೇಳಲು ಅವನು, <<ನೀನೇ>> ಎಂದು ಹೇಳಿದನು.15ಅಹಾಬನು ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಜನರಿದ್ದರು. ಇಸ್ರಾಯೇಲರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಜನರಿದ್ದರು.16ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.17ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಿದರು.18ಅವನು ಅವರಿಗೆ, <<ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ>> ಎಂದು ಆಜ್ಞಾಪಿಸಿದನು.19ಮೊದಲು ಹೊರಟುಬಂದಿದ್ದ ದೇಶಾಧಿಪತಿಗಳ ಆಳುಗಳ ಹಿಂದೆ ಇಸ್ರಾಯೇಲ್ ಸೈನ್ಯದವರೂ ಬಂದರು.20ಅವರಲ್ಲಿ ಪ್ರತಿಯೊಬ್ಬನೂ ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದುವರಿದರು. ಅರಾಮ್ಯರು ಓಡಿಹೋಗಲು ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅವರ ಅರಸನಾದ ಬೆನ್ಹದದನೂ ಹಾಗು ಕೆಲವು ಸವಾರರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.21ಇಸ್ರಾಯೇಲರ ಅರಸನು ಹೊರಟು ಬಂದು ಅರಾಮ್ಯರ ರಥಾಶ್ವಬಲಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು.22ಆಗ ಪ್ರವಾದಿಯು ಪುನಃ ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, <<ಅರಾಮ್ಯರ ಅರಸನು ಮುಂದಿನ ವರ್ಷದಲ್ಲಿ ಇನ್ನೊಮ್ಮೆ ನಿನಗೆ ವಿರುದ್ಧವಾಗಿ ಬರುತ್ತಾನೆ. ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ, ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಆಲೋಚಿಸು>> ಎಂದನು.23ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, <<ಇಸ್ರಾಯೇಲ್ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು. ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಹೇಗೂ ಜಯಹೊಂದುವೆವು.24ನೀನು ಆಯಾ ಸ್ಥಳಗಳಲ್ಲಿರುವ ಅರಸರನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇಮಿಸು.25ಅನಂತರ ನಮ್ಮ ಸೈನ್ಯದಿಂದ ನಷ್ಟವಾಗಿ ಹೋದಷ್ಟು ಜನರನ್ನು, ಕುದುರೆಗಳನ್ನೂ, ರಥಗಳನ್ನೂ ತಿರುಗಿ ಕೂಡಿಸಿ ಅವರೊಡನೆ ಬಯಲಿನಲ್ಲಿ ಯುದ್ಧಮಾಡೋಣ. ನಮಗೆ ಹೇಗೂ ಜಯಸಿಕ್ಕುವುದು ನಿಶ್ಚಯ>> ಎಂದು ಹೇಳಿದನು. ಅವನು ಅದರಂತೆಯೇ ಮಾಡಿದನು.26ಒಂದು ವರ್ಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಅಫೇಕಕ್ಕೆ ಹೋದನು.27ಇಸ್ರಾಯೇಲರು ಸಹ ಆಹಾರ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಂಡು ಅವರಿಗೆ ವಿರುದ್ಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು.28ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, <<ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು>> ಎಂದು ಹೇಳಿದನು.29ಈ ಎರಡು ಸೈನ್ಯಗಳು ಏಳು ದಿನಗಳ ವರೆಗೆ ಎದುರುಬದುರಾಗಿ ಪಾಳೆಯ ಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲರು ಆ ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು.30ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನು ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಬಚ್ಚಿಟ್ಟುಕೊಂಡನು.ಅಹಾಬನು ಬೆನ್ಹದದನನ್ನು ಉಳಿಸಿದ್ದು
31ಆಗ ಅವನ ಸೇವಕರು ಅವನಿಗೆ, <<ಇಸ್ರಾಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ. ಆದುದರಿಂದ ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ. ಹೀಗೆ ಮಾಡುವುದಾದರೆ ಅವನು ನಿನ್ನ ಜೀವವನ್ನು ಉಳಿಸಾನು>> ಎಂದು ಹೇಳಿದರು.32ಅವರು ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, <<ನನಗೆ ಜೀವದಾನಮಾಡಬೇಕು ಎಂದು ನಿನ್ನ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ>> ಅಂದರು. ಆಗ ಅವನು, <<ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು>> ಎಂದು ಉತ್ತರಕೊಟ್ಟನು.33ಅವರು ಈ ಮಾತು ಶುಭವಚನವೆಂದು ನೆನಸಿ ಕೂಡಲೆ ಅವನ ಮಾತನ್ನೇ ಹಿಡಿದು, <<ಬೆನ್ಹದದನು ನಿನ್ನ ಸಹೋದರನೇ ಹೌದು>> ಅಂದರು. ಅವನು ಅವರಿಗೆ, <<ಹೋಗಿ ಬೆನ್ಹದದನನ್ನು ಕರೆದುಕೊಂಡು ಬನ್ನಿರಿ>> ಎಂದು ಆಜ್ಞಾಪಿಸಲು ಅವನು ಬಂದಾಗ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.34ಬೆನ್ಹದದನು ಅವನಿಗೆ, <<ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ, ಅವನು ಸಮಾರ್ಯದಲ್ಲಿ ಮಾಡಿದಂತೆ ನೀನು ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ನಿನ್ನದಾಗಿಸಿಕೊಳ್ಳಬಹುದು>> ಎಂದು ಹೇಳಿದನು. ಆಗ ಅಹಾಬನು, <<ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ>> ಎಂದು ಹೇಳಿ ಅವನಿಂದ ಪ್ರಮಾಣ ಮಾಡಿಸಿ ಕಳುಹಿಸಿಬಿಟ್ಟನು.ಪ್ರವಾದಿ ಆಹಾಬನನ್ನು ಖಂಡಿಸಿದ್ದು
35ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ <<ನನ್ನನ್ನು ಹೊಡಿ>> ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.36ಆಗ ಪ್ರವಾದಿಯು ಅವನಿಗೆ, <<ನೀನು ಯೆಹೋವನ ಮಾತನ್ನು ಕೇಳದೆ ಹೋದುದರಿಂದ ನನ್ನನ್ನು ಬಿಟ್ಟು ಹೊರಟ ಕೂಡಲೇ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವುದು>> ಎಂದನು. ಅವನು ಅವನನ್ನು ಬಿಟ್ಟು ಹೋದ ಕೂಡಲೆ ಒಂದು ಸಿಂಹವು ಬಂದು ಅವನನ್ನು ಕೊಂದು ಹಾಕಿತು.37ಅನಂತರ ಆ ಪ್ರವಾದಿಯು ಇನ್ನೊಬ್ಬನನ್ನು ನೋಡಿ, <<ನನ್ನನ್ನು ಹೊಡಿ>> ಎಂದು ಅವನನ್ನು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು.38ಆಗ ಅವನು ತನ್ನ ಗುರುತು ತಿಳಿಯಬಾರದೆಂದು ಮುಂಡಾಸದಿಂದ ಕಣ್ಣುಗಳನ್ನು ಮುಚ್ಚಿಕೊಂಡು ಅರಸನು ಬರುವ ದಾರಿಯಲ್ಲಿ ನಿಂತನು.39ಅವನು ಹಾದು ಹೋಗುವಾಗ ಅವನಿಗೆ, <<ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬ ಸೈನಿಕನು ಶತ್ರುವನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, <ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವುದು ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು> ಎಂದು ಆಜ್ಞಾಪಿಸಿದನು.40ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು>> ಎಂದು ಮೊರೆಯಿಟ್ಟನು. ಇಸ್ರಾಯೇಲರ ಅರಸನು ಇವನಿಗೆ <<ನಿನಗೆ ಆ ತೀರ್ಪು ಸರಿಯಾಗಿದೆ, ತೀರ್ಮಾನಿಸಿದವನು ನೀನೇ ಅಲ್ಲವೋ?>> ಎಂದು ನುಡಿದನು.41ಕೂಡಲೆ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದುದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲರ ಅರಸನಿಗೆ ಗೊತ್ತಾಯಿತು.42ಆಗ ಪ್ರವಾದಿಯು ಅರಸನಿಗೆ, <<ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ>> ಎಂದು ಹೇಳಿದನು.43ಆಗ ಇಸ್ರಾಯೇಲರ ಅರಸನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೋದನು.
21ನಾಬೋತನ ದ್ರಾಕ್ಷಿತೋಟ ಮತ್ತು ಅವನ ಹತ್ಯೆ
1ಅನಂತರ ಸಂಭವಿಸಿದ್ದೇನೆಂದರೆ, ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷಿತೋಟವಿತ್ತು.2ಅಹಾಬನು ನಾಬೋತನಿಗೆ, <<ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು, ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು. ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ. ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ>> ಎಂದು ಹೇಳಿದನು.3ಅದಕ್ಕೆ ನಾಬೋತನು ಅಹಾಬನಿಗೆ, <<ನಾನು ಪಿತ್ರಾರ್ಜಿತ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ>> ಎಂದು ಉತ್ತರಕೊಟ್ಟನು.4<<ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ>> ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.5ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನನ್ನು, <<ನೀನು ಯಾಕೆ ಊಟಮಾಡುವುದಿಲ್ಲ? ನಿನಗೆ ಯಾವ ಚಿಂತೆ ಇರುತ್ತದೆ?>> ಎಂದು ಕೇಳಿದಳು.6ಅವನು, <<ನಾನು ಇಜ್ರೇಲಿನವನಾದ ನಾಬೋತನಿಗೆ <ನಿನ್ನ ದ್ರಾಕ್ಷಿತೋಟವನ್ನು ನನಗೆ ಮಾರಿಬಿಡು, ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷಿತೋಟವನ್ನು ಕೊಡುತ್ತೇನೆ> ಎಂಬುದಾಗಿ ಹೇಳಿದೆನು. ಆದರೆ ಅವನು ಕೊಡುವುದಿಲ್ಲ ಎಂದನು>> ಎಂದು ಉತ್ತರಕೊಟ್ಟನು.7ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ, <<ಇಸ್ರಾಯೇಲರ ಅರಸನಾದ ನೀನು ಹೀಗೆ ಮಾಡುವುದು ಸರಿಯೇ? ಎದ್ದು ಊಟ ಮಾಡಿ ಸಂತೋಷದಿಂದಿರು. ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ>> ಎಂದು ಹೇಳಿದಳು.8ಆಮೇಲೆ ಈಜೆಬೆಲಳು ಅಹಾಬನ ಹೆಸರಿನಲ್ಲಿ ಒಂದು ಪತ್ರ ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನ ಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.9ಅದರಲ್ಲಿ, <<ಎಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿ, ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ,10ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ>> ಎಂದು ಬರೆದಿದ್ದಳು.11ಆಗ ಊರಿನ ಹಿರಿಯರು ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.12ಅವರು ಉಪವಾಸವನ್ನು ಪ್ರಕಟಿಸಿ, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು.13ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.14ನಾಬೋತನು ಕಲ್ಲೆಸೆಯಲ್ಪಟ್ಟು ಸತ್ತ ವರ್ತಮಾನವನ್ನು ಹಿರಿಯರು ಈಜೆಬೆಲಳಿಗೆ ತಿಳಿಸಿದರು.15ಆಕೆಯು ಇದನ್ನು ಕೇಳಿ ಅಹಾಬನಿಗೆ, <<ನೀನು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೋ, ಅವನು ಜೀವದಿಂದಿಲ್ಲ ಸತ್ತನು>> ಎಂದು ಹೇಳಿದಳು.16ಇಜ್ರೇಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ ದ್ರಾಕ್ಷಿ ತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೋಸ್ಕರ ಇಳಿದು ಹೋದನು.17ಆಗ ತಿಷ್ಬೀಯನಾದ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು.18ಆತನು ಅವನಿಗೆ, <<ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು. ಅವನು ಈಗ ನಾಬೋತನ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ.19ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು>> ಎಂಬುದೇ.20ಅಹಾಬನು ಎಲೀಯನನ್ನು ಕಂಡು ಅವನನ್ನು, <<ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ>> ಎಂದು ಕೇಳಲು ಅವನು, <<ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.21ಯೆಹೋವನು ನಿನ್ನನ್ನು ಕುರಿತು, <ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು.22ನೀನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರೇಪಿಸಿ ನನಗೆ ಕೋಪವನ್ನೆಬಿಸಿದ್ದರಿಂದ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು> ಅನ್ನುತ್ತಾನೆ23ಇದಲ್ಲದೆ ಆತನು ಈಜೆಬೆಲಳನ್ನು ಕುರಿತು, <ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು.24ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದು ಬಿಡುವವು> ಎಂದು ಹೇಳುತ್ತಾನೆ>> ಅಂದನು.25ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.26ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.27ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡು, ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.28ಆದುದರಿಂದ ಯೆಹೋವನು ತಿಷ್ಬೀಯನಾದ ಎಲೀಯನಿಗೆ, <<ಅಹಾಬನು ನನ್ನ ಮುಂದೆ ತಗ್ಗಿಸಿಕೊಂಡಿದ್ದನ್ನು ಕಂಡಿಯಾ?29ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು>> ಎಂದು ಹೇಳಿದನು.
22ಅಹಾಬನನ್ನು ಎಚ್ಚರಿಸಿದ ಮೀಕಾಯೆಹು
1ಮೂರು ವರ್ಷಗಳ ಕಾಲ ಇಸ್ರಾಯೇಲರಿಗೂ ಅರಾಮ್ಯರಿಗೂ ಯುದ್ಧ ನಡೆಯಲಿಲ್ಲ.2ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನ ಬಳಿಗೆ ಬಂದನು.3ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, <<ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತುಕೊಂಡಿರುತ್ತೇವೆ>> ಎಂದು ಹೇಳಿದನು.4ಅವನು ಯೆಹೋಷಾಫಾಟನಿಗೆ, <<ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?>> ಎಂದು ಕೇಳಲು ಅವನು, <<ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?>> ಎಂದು ಉತ್ತರಕೊಟ್ಟನು.5ಯೆಹೋಷಾಫಾಟನು, <<ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು>> ಎಂದು ಇಸ್ರಾಯೇಲರ ಅರಸನನ್ನು ಬೇಡಿಕೊಂಡನು.6ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, <<ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?>> ಎಂದು ಕೇಳಲು ಅವರು, <<ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು>> ಅಂದರು.7ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು, <<ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಗಳು ಇರುವುದಿಲ್ಲವೋ?>> ಎಂದು ಕೇಳಿದನು.8ಅದಕ್ಕೆ ಅವನು <<ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ>> ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು <<ಅರಸನು ಹಾಗನ್ನದಿರಲಿ>> ಅಂದನು.9ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, <<ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಬೇಗನೆ ಕರೆದುಕೊಂಡು ಬಾ>> ಎಂದು ಆಜ್ಞಾಪಿಸಿದನು.10ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು.11ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, <<ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ>> ಎಂದನು.12ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, <<ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು>> ಅಂದರು.13ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, <<ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು>> ಎಂದು ಹೇಳಿದನು.14ಅದಕ್ಕೆ ಮೀಕಾಯೆಹುವು, <<ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ>> ಎಂದು ಉತ್ತರಕೊಟ್ಟನು.15ಅವನು ಅರಸನ ಬಳಿಗೆ ಬಂದಾಗ ಅರಸನು, <<ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?>> ಎಂದು ಕೇಳಲು ಅವನು, <<ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು>> ಎಂದು ಹೇಳಿದನು.16ಆಗ ಅರಸನು, <<ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?>> ಎಂದನು.17ಆಗ ಮೀಕಾಯೆಹುವು, <<ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, <ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ> ಎಂದನು>> ಎಂಬುದಾಗಿ ಉತ್ತರಕೊಟ್ಟನು.18ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, <<ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?>> ಎಂದನು.19ಅದಕ್ಕೆ ಮೀಕಾಯೆಹುವು <<ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.20ಯೆಹೋವನು ತನ್ನ ಹತ್ತಿರ ನಿಂತವರನ್ನು, <ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ> ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.21ಕೊನೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಅವನಿಗೆ, <ನಾನು ಹೋಗಿ ಅವರನ್ನು ಪ್ರೇರೇಪಿಸುವೆನು> ಅಂದಿತು.22<ಹೇಗೆ ಪ್ರೇರೇಪಿಸುವಿ?> ಎಂದು ಯೆಹೋವನು ಕೇಳಲು ಅದು, <ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು> ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, <ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ> ಅಂದನು.23ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ>> ಎಂದು ಹೇಳಿದನು.24ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, <<ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?>> ಎನ್ನಲು25ಮೀಕಾಯೆಹುವು, <<ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು>> ಎಂದು ಉತ್ತರಕೊಟ್ಟನು.26ಆಗ ಇಸ್ರಾಯೇಲಿನ ಅರಸನು ಸೇವಕರಿಗೆ, <<ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ, ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ,27<ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ> ಎಂದು ಹೇಳಿರಿ>> ಎಂಬುದಾಗಿ ಆಜ್ಞಾಪಿಸಿದನು.28ಮೀಕಾಯೆಹುವು ಅರಸನಿಗೆ, <<ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ>> ಎಂದು ಹೇಳಿ <<ಎಲ್ಲಾ ಜನರೇ, ಇದನ್ನು ಕೇಳಿರಿ>> ಎಂದು ಕೂಗಿದನು.ಅಹಾಬನ ಮರಣ
29ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು.30ಇಸ್ರಾಯೇಲರ ಅರಸನೂ ಯೆಹೋಷಾಫಾಟನಿಗೆ, <<ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು. ನೀನಾದರೂ ನಿನ್ನ ರಾಜವಸ್ತ್ರಗಳನ್ನೇ ಧರಿಸಿಕೊಂಡು ಬಾ>> ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು.31ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಅಧಿಪತಿಗಳಿಗೆ, <<ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನು ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ>> ಎಂದು ಆಜ್ಞಾಪಿಸಿದನು.32ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು.33ಆಗ ಅವನು ಇಸ್ರಾಯೇಲ್ಯರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು.34ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, <<ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ>> ಎಂದು ಹೇಳಿದನು.35ಆದರೂ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲಿಯೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.36ಸೂರ್ಯಸ್ತಮಾನವಾದ ಕೂಡಲೆ <<ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ>> ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು37ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿ ಮಾಡಿದರು.38ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು. ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು.39ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತ ಮಂದಿರ ಪಟ್ಟಣಗಳು, ಇವುಗಳ ವಿವರವೂ ಮತ್ತು ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.40ಅಹಾಬನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯ ಎಂಬುವನು ಅರಸನಾದನು.ಯೆಹೂದ್ಯರ ಅರಸನಾದ ಯೆಹೋಷಾಫಾಟ
41ಇಸ್ರಾಯೇಲ್ಯರ ಅರಸನಾದ ಅಹಾಬನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.42ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ43ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.44ಅವನು ಇಸ್ರಾಯೇಲ್ಯರ ಅರಸರೊಡನೆ ಸಮಾಧಾನದಿಂದಿದ್ದನು.45ಅವನ ಉಳಿದ ಚರಿತ್ರೆಯೂ ಅವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರವೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.46ಅವನು ತನ್ನ ತಂದೆಯಾದ ಅಸನ ಕಾಲದಲ್ಲಿ ತಪ್ಪಿಸಕೊಂಡ ದೇವದಾಸದಾಸಿಯರನ್ನು ದೇಶದಿಂದ ತೆಗೆದುಹಾಕಿದನು.47ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.48ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.49ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು, <<ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ>> ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.50ಯೆಹೋಷಾಫಾಟನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋರಾಮನು ಅರಸನಾದನು.ಇಸ್ರಾಯೇಲರ ಅರಸನಾದ ಅಹಜ್ಯ
51ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗನಾದ ಅಹಜ್ಯ ಎಂಬುವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳ್ವಿಕೆ ಮಾಡಿದನು.52ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.53ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಉಂಟುಮಾಡಿನು.
2 ಅರಸುಗಳು
1ಪ್ರವಾದಿಯಾದ ಎಲೀಯನು ಮತ್ತು ಅರಸನಾದ ಅಹಜ್ಯನು
1ಅಹಾಬನು ಮರಣಹೊಂದಿದ ನಂತರ ಮೋವಾಬ್ಯರು ಇಸ್ರಾಯೇಲರಿಗೆ ವಿರುದ್ಧವಾಗಿ ದಂಗೆ ಎದ್ದರು.2ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, <<ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ>> ಎಂದು ಹೇಳಿಕಳುಹಿಸಿದನು.3ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, <<ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, <ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?4ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು> ಎಂಬುದಾಗಿ ಯೆಹೋವನು ಅನ್ನುತ್ತಾನೆ>> ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.5ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ, <<ನೀವು ಹಿಂದಿರುಗಿ ಬಂದ್ದದೇಕೆ?>> ಎಂದು ಕೇಳಿದನು.6ಅದಕ್ಕೆ ಅವರು, <<ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, <ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ> ಯೆಹೋವನ ಹೆಸರಿನಲ್ಲಿ ಅವನಿಗೆ, <ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು> ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು>> ಎಂದು ಉತ್ತರ ಕೊಟ್ಟರು.7ಅರಸನು ತಿರುಗಿ ಅವರನ್ನು, <<ನಿಮಗೆ ಎದುರಾಗಿ ಹೀಗೆ ಹೇಳಿದ ಮನುಷ್ಯನು ಹೇಗಿದ್ದನು?>> ಎಂದು ಕೇಳಲು,8ಅವರು, <<ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು>> ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, <<ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು>> ಎಂದನು.9ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, <<ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ>> ಎಂದು ಹೇಳಿದನು.10ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, <<ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ>> ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.11ತರುವಾಯ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನೂ, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಹೋಗಿ ಎಲೀಯನಿಗೆ <<ದೇವರ ಮನುಷ್ಯನೇ ಬೇಗನೆ ಇಳಿದು ಬಾ, ಅರಸನು ನಿನ್ನನ್ನು ಕರೆಯುತ್ತಾನೆ>> ಎಂದು ಹೇಳಿದನು.12ಆಗ ಎಲೀಯನು, <<ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ>> ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.13ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, <<ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.14ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ>> ಎಂದು ಬೇಡಿಕೊಂಡನು.15ಆಗ ಯೆಹೋವನ ದೂತನು ಎಲೀಯನಿಗೆ, <<ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ>> ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.16ನಂತರ ಎಲೀಯನು ಅರಸನಿಗೆ, <<ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ>> ಎಂದು ಹೇಳಿದನು.17ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು18ಅಹಜ್ಯನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
2ಎಲೀಯನು ಸ್ವರ್ಗಾರೋಹಣ
1ಯೆಹೋವನು ಎಲೀಯನನ್ನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸಿಕೊಳ್ಳುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.2ಆಗ ಎಲೀಯನು ಎಲೀಷನಿಗೆ, <<ನೀನು ಇಲ್ಲೇ ಇರು, ಯೆಹೋವನು ನನಗೆ ಬೇತೇಲಿಗೆ ಹೋಗಬೇಕೆಂದು>> ಆಜ್ಞಾಪಿಸಿದ್ದಾನೆ ಎನ್ನಲು, ಎಲೀಷನು, <<ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ>> ಎಂದು ಉತ್ತರಕೊಟ್ಟನು. ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು.3ಬೇತೇಲಿನ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನನ್ನು, <<ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?>> ಎಂದು ಕೇಳಿದರು. ಅದಕ್ಕೆ ಅವನು, <<ಗೊತ್ತಿದೆ ನೀವು ಸುಮ್ಮನಿರಿ>> ಎಂದನು.4ಆಗ ಎಲೀಯನು ಎಲೀಷನಿಗೆ, <<ನೀನು ಇಲ್ಲೇ ಇರು, ಯೆಹೋವನು ನನಗೆ ಯೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ>> ಎಂದು ಹೇಳಿದನು. ಆದರೆ ಎಲೀಷನು, <<ಯೆಹೋವನಾಣೆ, ನಿನ್ನ ಜೀವದಾಣೆ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ>> ಎಂದು ಉತ್ತರ ಕೊಟ್ಟನು. ಎಲೀಷನು ಅವನ ಜೊತೆಯಲ್ಲಿ ಯೆರಿಕೋವಿಗೆ ಹೋದನು.5ಯೆರಿಕೋವಿನಲ್ಲಿದ್ದ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನಿಗೆ, <<ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?>> ಎಂದು ಕೇಳಿದರು. ಅದಕ್ಕೆ ಅವನು, ನನಗೆ <<ಗೊತ್ತುಂಟು ನೀವು ಸುಮ್ಮನಿರಿ>> ಎಂದು ಉತ್ತರ ಕೊಟ್ಟನು.6ಎಲೀಯನು ತಿರುಗಿ ಅವನಿಗೆ, <<ನೀನು ಇಲ್ಲೇ ಇರು. ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ>> ಎಂದು ಹೇಳಿದನು. ಅದಕ್ಕೆ ಎಲೀಷನು, <<ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ>> ಎಂದು ಉತ್ತರ ಕೊಟ್ಟನು. ಅನಂತರ ಅವರಿಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು.7ಪ್ರವಾದಿ ಮಂಡಳಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಯೊರ್ದನಿಗೆ ಸ್ವಲ್ಪ ದೂರದಲ್ಲಿಯೇ ನಿಂತುಕೊಂಡರು.8ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು. ಇಬ್ಬರೂ ಒಣನೆಲದ ಮೇಲೆ ನಡೆದುಕೊಂಡು ಯೊರ್ದನನ್ನು ದಾಟಿದರು.9ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, <<ನಿನ್ನನ್ನು ಬಿಟ್ಟು ಹೋಗುವ ಮೊದಲು, ನಾನು ನಿನಗೋಸ್ಕರ ಏನು ಮಾಡಬೇಕೆನ್ನುತ್ತೀ ಹೇಳು>> ಎಂದು ಕೇಳಿದನು. ಅದಕ್ಕೆ ಎಲೀಷನು, <<ನಿನಗಿರುವ ಆತ್ಮದಲ್ಲಿ ನನಗೆ ಎರಡರಷ್ಟು ಪಾಲನ್ನು ಅನುಗ್ರಹಿಸು>> ಎಂದು ಬೇಡಿಕೊಂಡನು.10ಆಗ ಎಲೀಯನು ಅವನಿಗೆ, <<ನೀನು ಕಷ್ಟಕರವಾದುದ್ದನ್ನು ಕೇಳಿಕೊಂಡಿರುವೆ. ಆದರೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವುದಾದರೆ ಅದು ನಿನಗೆ ದೊರಕುವುದು. ಇಲ್ಲವಾದರೆ ದೊರಕುವುದಿಲ್ಲ>> ಎಂದನು.11ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.12ಎಲೀಷನು ಅದನ್ನು ನೋಡುತ್ತಾ, <<ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥಾರಥಾಶ್ವಗಳಾಗಿದ್ದವನೇ>> ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.13ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಯೊರ್ದನ್ ನದಿ ತೀರಕ್ಕೆ ಬಂದು,14<<ಎಲೀಯನ ದೇವರಾದ ಯೆಹೋವನೆಲ್ಲಿ?>> ಎಂದು ಅಂದುಕೊಂಡು, ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು.15ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, <<ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ>> ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.16ಅನಂತರ ಅವರು ಅವನಿಗೆ, <<ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠಜನರಿದ್ದಾರೆ. ನಿನ್ನ ಯಜಮಾನನ್ನು ಹುಡುಕುವುದಕ್ಕೆ ಅವರಿಗೆ ಅಪ್ಪಣೆಯಾಗಲಿ ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು>> ಎಂದು ಹೇಳಿದರು. ಅವನು ಅವರಿಗೆ, <<ನೀವು ಅವರನ್ನು ಕಳುಹಿಸಬೇಡಿರಿ>> ಎಂದನು.17ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು, <<ಅವರನ್ನು ಕಳುಹಿಸಿರಿ>> ಎಂದು ಅಪ್ಪಣೆ ಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ.18ಇನ್ನೂ ಯೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಬಂದರು. ಎಲೀಷನು ಅವರಿಗೆ, ಹೋಗಬೇಡಿರಿ ಎಂದು ನಾನು ಹೇಳಲಿಲ್ಲವೋ? ಎಂದನು.ಎಲೀಷನು ನೀರಿನಲ್ಲಿದ್ದ ದೋಷವನ್ನು ಪರಿಹರಿಸಿದ್ದು
19ಯೆರಿಕೋವಿನ ಜನರು ಎಲೀಷನಿಗೆ, <<ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ, ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೆಯದಾಗಿದೆ. ಆದರೆ ನೀರು ಕೆಟ್ಟದ್ದಾಗಿರುವುದರಿಂದ ಬಂಜೆತನ ಉಂಟಾಗಿದೆ>> ಎಂದು ಹೇಳಿದರು.20ಆಗ ಎಲೀಷನು ಅವರಿಗೆ, <<ಒಂದು ಹೊಸ ಮಡಿಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದು ಕೊಡಿರಿ>> ಎಂದು ಹೇಳಿದಾಗ, ಅವರು ತಂದುಕೊಟ್ಟರು.21ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ, <<ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ>> ಎಂದು ಹೇಳಿದನು.22ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು, ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಇರುತ್ತದೆ.ಎಲೀಷನು ಪರಿಹಾಸ್ಯ ಮಾಡಿದ ಹುಡುಗರನ್ನು ಶಪಿಸಿದ್ದು
23ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, <<ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ>> ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.24ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.25ಎಲೀಷನು ಅಲ್ಲಿಂದ ಕರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾರ್ಯಕ್ಕೆ ಹಿಂದಿರುಗಿದನು.
3ಇಸ್ರಾಯೇಲ್ಯರಿಗೂ ಮೋವಾಬ್ಯರಿಗೂ ನಡೆದ ಯುದ್ಧ
1ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರ್ಷ ಆಳಿದನು.2ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.3ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.4ಅನೇಕ ಕುರಿಹಿಂಡುಗಳನ್ನು ಹೊಂದಿದ್ದ ಮೋವಾಬ್ಯರ ಅರಸನಾದ ಮೇಷನೆಂಬುವನು ಇಸ್ರಾಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.5ಆದರೆ ಅಹಾಬನು ಮರಣಹೊಂದಿದ ನಂತರ ಮೋವಾಬ್ಯರ ಅರಸನು ಇಸ್ರಾಯೇಲರ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.6ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು ಸಮಾರ್ಯದಿಂದ ಹೊರಟು ಬಂದನು.7ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, <<ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?>> ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, <<ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ>> ಎಂದು ಉತ್ತರಕೊಟ್ಟನು.8ಮತ್ತೆ ಯೆಹೋಷಾಫಾಟನು, <<ಯಾವ ಮಾರ್ಗವಾಗಿ ಹೋಗಬೇಕು?>> ಎಂದು ವಿಚಾರಿಸಿದಾಗ ಯೋರಾಮನು, <<ಎದೋಮ್ಯರ ಅರಣ್ಯ ಮಾರ್ಗವಾಗಿ>> ಎಂದನು.9ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು.10ಇಸ್ರಾಯೇಲರ ಅರಸರು, <<ಅಯ್ಯೋ, ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ>> ಎಂದು ಗೋಳಾಡಿದರು.11ಆದರೆ ಯೆಹೋಷಾಫಾಟನು, <<ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?>> ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, <<ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ>> ಎಂದು ಉತ್ತರಕೊಟ್ಟನು.12ಯೆಹೋಷಾಫಾಟನು, <<ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು>> ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.13ಎಲೀಷನು ಇಸ್ರಾಯೇಲರ ಅರಸನಿಗೆ, <<ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು>> ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, <<ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?>> ಎಂದನು.14ಆಗ ಎಲೀಷನು, <<ನಾನು ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿರಲಿಲ್ಲ. ನಿನ್ನನ್ನು ಲಕ್ಷಿಸುತ್ತಲೂ ಇರಲಿಲ್ಲ.15ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ>> ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.16ಅನಂತರ ಎಲೀಷನು ಇಸ್ರಾಯೇಲರ ಅರಸನಿಗೆ, ಯೆಹೋವನು ಹೀಗೆ ಹೇಳುತ್ತಾನೆ, <<ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ.17<ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು> ಎಂಬುದಾಗಿ ಯೆಹೋವನು ಅನ್ನುತ್ತಾನೆ.18<<ಯೆಹೋವನ ದೃಷ್ಟಿಯಲ್ಲಿ ಈ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.19ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹಣ್ಣಿನ ಮರಗಳನ್ನೂ ಕಡಿದುಹಾಕಿ, ಒರತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿಸಿ ಹಾಳುಮಾಡುವಿರಿ>> ಎಂದು ನುಡಿದನು.20ಮುಂಜಾನೆ ವೇಳೆಯಲ್ಲಿ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಪಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.21ಅರಸರು ತಮಗೆ ವಿರುದ್ಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬುವುದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲಾ ಯೌವನಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಪ್ರದೇಶಕ್ಕೆ ಬಂದರು.22ಬೆಳಿಗ್ಗೆ ಎದ್ದು ನೋಡಲಾಗಿ, ಎದುರಿಗೆ ಇದ್ದ ನೀರು ಮೋವಾಬ್ಯರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.23ಇವರು, <<ಅದು ರಕ್ತ! ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹಾರರಾಗಿರಬೇಕು. ಮೋವಾಬ್ಯರೇ ಏಳಿರಿ, ಸುಲಿಗೆಗೆ ಹೋಗೋಣ!>> ಎಂದು ಕೂಗಿಕೊಂಡು ಇಸ್ರಾಯೇಲರ ಪಾಳೆಯಕ್ಕೆ ಹೋದರು.24ಆದರೆ ಇಸ್ರಾಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸಿದರು.25ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.26ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು, ಏಳು ನೂರು ಮಂದಿ ಭಟರೊಡನೆ, ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಲು ಪ್ರಯತ್ನಿಸಿದನು. ಆದರೆ ಆಗದೆಹೋಯಿತು.27ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.
4ಬಡ ವಿಧವೆಗೆ ಎಣ್ಣೆದಾನ
1ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, <<ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ>> ಎಂದು ಮೊರೆಯಿಟ್ಟಳು.2ಎಲೀಷನು ಆಕೆಗೆ, <<ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.>> ಅದಕ್ಕೆ ಆಕೆಯು, <<ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ>> ಎಂದು ಉತ್ತರ ಕೊಟ್ಟಳು.3ಆಗ ಎಲೀಷನು ಆಕೆಗೆ, <<ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.4ಅನಂತರ, ನೀನು, ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒಂದು ಕಡೆಯಿಡು>> ಎಂದು ಹೇಳಿದನು.5ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು, ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.6ಪಾತ್ರೆಗಳೆಲ್ಲಾ ತುಂಬಿದಾಗ ಆಕೆಯು ಮಗನಿಗೆ, <<ಇನ್ನೊಂದು ಪಾತ್ರೆಯನ್ನು ತಂದಿಡು>> ಎನ್ನಲು ಅವನು, <<ಪಾತ್ರೆಗಳೆಲ್ಲ ಮುಗಿದು ಹೋದವು>> ಎಂದು ಉತ್ತರಕೊಟ್ಟನು. ಕೂಡಲೇ ಎಣ್ಣೆ ಉಕ್ಕುವುದು ನಿಂತುಹೋಯಿತು.7ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, <<ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ>> ಎಂದನು.ಶೂನೇಮ್ಯಳ ಸತ್ತುಹೋದ ಮಗನಿಗೆ ಜೀವದಾನ
8ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.9ಆ ಸ್ತ್ರೀಯು ತನ್ನ ಗಂಡನಿಗೆ, <<ಯಾವಾಗಲೂ ಈ ದಾರಿಯಲ್ಲಿ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ, ದೇವರ ಮನುಷ್ಯನೂ ಆಗಿರುತ್ತಾನೆ ಎಂದು ನನಗೆ ಗೊತ್ತಾಯಿತು.10ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ. ಅವನು ಇಲ್ಲಿ ಬಂದಾಗಲೆಲ್ಲಾ ಅದರಲ್ಲಿ ಹೋಗಿ ಉಳಿದುಕೊಳ್ಳಲಿ>> ಎಂದು ಹೇಳಿದಳು.11ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣಿವಾರಿಸಿಕೊಂಡನು.12ಅನಂತರ, <<ಆ ಶೂನೇಮ್ಯಳನ್ನು ಕರೆಯಿರಿ>> ಎಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು, ಆಕೆಯು ಬಂದು ಅವನ ಮುಂದೆ ನಿಂತಳು.13ಆಗ ಎಲೀಷನು ಗೇಹಜಿಗೆ <<ನೀನು ಆಕೆಗೆ ಹೇಳು, <ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರ ಮಾಡಿರುವೆ ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನಗೋಸ್ಕರ ಅರಸನ ಬಳಿ ಅಥವಾ ಸೇನಾಧಿಪತಿಯ ಬಳಿಯಾಗಲಿ ಮಾತನಾಡಬೇಕೋ> ಎಂದು ಕೇಳಲು>> ಆಕೆಯು, <<ನಾನು ಸ್ವಕುಲದವರ ಮಧ್ಯದಲ್ಲಿ ವಾಸವಾಗಿದ್ದೇನೆ>> ಎಂದು ಉತ್ತರಕೊಟ್ಟಳು.14ಆ ಮೇಲೆ ಎಲೀಷನು ಗೇಹಜಿಗೆ, <<ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು>> ಎಂದು ಕೇಳಲು ಅವನು, <<ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ>> ಎಂದನು.15ಇದನ್ನು ಕೇಳಿ ಎಲೀಷನು, <<ಆ ಸ್ತ್ರೀಯನ್ನು ಕರೆ>> ಎಂದು ಆಜ್ಞಾಪಿಸಿದನು. ಅವನು ಹೋಗಿ ಕರೆಯಲು, ಆಕೆಯು ಬಂದು ಬಾಗಿಲಿನ ಹತ್ತಿರ ನಿಂತಳು.16ಎಲೀಷನು ಆಕೆಗೆ, <<ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ>> ಎಂದು ಹೇಳಿದನು. ಅದಕ್ಕೆ ಆಕೆಯು, <<ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ>> ಎಂದು ನುಡಿದಳು.17ಆದರೆ ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ, ಮುಂದಿನ ವರ್ಷ ಅದೇ ಕಾಲದಲ್ಲಿ, ಒಬ್ಬ ಮಗನನ್ನು ಹೆತ್ತಳು.18ಹುಡುಗನು ದೊಡ್ಡವನಾದ ಮೇಲೆ ಒಂದು ದಿನ, ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.19ಅಲ್ಲಿದ್ದಾಗ ಅವನು ಪಕ್ಕನೆ, <<ಅಪ್ಪಾ, ನನ್ನ ತಲೆ, ನನ್ನ ತಲೆ>> ಎಂದು ಕೂಗಲು, ತಂದೆಯು ಒಬ್ಬ ಸೇವಕನನ್ನು ಕರೆದು ಅವನಿಗೆ, <<ಇವನನ್ನು ತಾಯಿಯ ಹತ್ತಿರ ಕರೆದುಕೊಂಡು ಹೋಗು>> ಎಂದು ಆಜ್ಞಾಪಿಸಿದನು.20ಸೇವಕನು ಹುಡುಗನನ್ನು ಅವನ ತಾಯಿಗೆ ತಂದು ಒಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದು ಅನಂತರ ಸತ್ತನು.21ಕೂಡಲೆ ಆಕೆಯು ಅವನನ್ನು ದೇವರ ಮನುಷ್ಯನ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮಂಚದ ಮೇಲೆ ಮಗನನ್ನು ಮಲಗಿಸಿ ಬಾಗಿಲು ಮುಚ್ಚಿದಳು.22ಗಂಡನನ್ನು ಕರೆಯಿಸಿ ಅವನಿಗೆ, <<ದಯವಿಟ್ಟು, ನನಗೋಸ್ಕರ ಒಬ್ಬ ಸೇವಕನನ್ನೂ, ಒಂದು ಕತ್ತೆಯನ್ನೂ ಕಳುಹಿಸು. ನಾನು ಬೇಗನೆ ದೇವರ ಮನುಷ್ಯನ ಬಳಿಗೆ ಹೋಗಿಬರುತ್ತೇನೆ>> ಎಂದು ಹೇಳಿದಳು.23ಅದಕ್ಕೆ ಅವನು, <<ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?>> ಎಂದನು. ಅದಕ್ಕೆ ಆಕೆಯು, <<ಎಲ್ಲವು ಸರಿಯೇ>> ಎಂದು ಹೇಳಿದಳು.24ನಂತರ ಆಕೆಯು ಕತ್ತೆಗೆ ತಡಿ ಹಾಕಿಸಿ, ಅದರ ಮೇಲೆ ಕುಳಿತುಕೊಂಡು ಸೇವಕನಿಗೆ, <<ಬೇಗ ಓಡಿಸು, ನಾನು ಅಪ್ಪಣೆಕೊಡುವವರೆಗೆ ನಿಲ್ಲಿಸಬೇಡ>> ಎಂದು ಆಜ್ಞಾಪಿಸಿದಳು.25ಹೀಗೆ ಆಕೆಯು ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ದೇವರ ಮನುಷ್ಯನು ಆಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, <<ಅಗೋ, ಅಲ್ಲಿ ಶೂನೇಮ್ಯಳು ಬರುತ್ತಿದ್ದಾಳೆ>>26ನೀನು, ದಯವಿಟ್ಟು ಓಡಿಹೋಗಿ ಆಕೆಯನ್ನು ಎದುರುಗೊಂಡು, <<ನಿನಗೂ, ನಿನ್ನ ಗಂಡನಿಗೂ, ಮಗನಿಗೂ ಕ್ಷೇಮವೋ?>> ಎಂದು ವಿಚಾರಿಸು ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ, <<ಕ್ಷೇಮ>> ಎಂದು ಉತ್ತರ ಕೊಟ್ಟು,27ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, <<ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ>> ಎಂದು ಹೇಳಿದನು.28ಆಕೆಯು ದೇವರ ಮನುಷ್ಯನಿಗೆ, <<ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೆನೇ? <ವಂಚಿಸಬಾರದೆಂದು> ಮೊರೆಯಿಟ್ಟೆನಲ್ಲವೇ?>> ಎಂದಳು.29ಆಗ ಎಲೀಷನು ಗೇಹಜಿಗೆ, <<ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ>> ಎಂದು ಹೇಳಿ ಕಳುಹಿಸಿದನು.30ಆದರೂ ಹುಡುಗನ ತಾಯಿ, <<ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ>> ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು.31ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಹುಡುಗನು ಮಾತನಾಡಲಿಲ್ಲ, ಎಚ್ಚರಗೊಳ್ಳಲೂ ಇಲ್ಲ. ಆದುದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ, <<ಹುಡುಗನು ಎಚ್ಚರವಾಗಲಿಲ್ಲ>> ಎಂದನು.32ಎಲೀಷನು ಆ ಮನೆಯನ್ನು ತಲುಪಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಮಲಗಿಸಿರುವುದನ್ನು ಕಂಡನು.33ಎಲೀಷನು ಒಳಗೆ ಹೋಗಿ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು.34ಅನಂತರ ಹುಡುಗನ ಮೇಲೆ ಬೋರಲುಬಿದ್ದು ತನ್ನ ಬಾಯಿ, ಕಣ್ಣು, ಕೈಗಳನ್ನು ಅವನ ಬಾಯಿ, ಕಣ್ಣು, ಕೈಗಳಿಗೆ ಮುಟ್ಟಿಸಿದ್ದರಿಂದ ಹುಡುಗನ ದೇಹವು ಬೆಚ್ಚಗಾಯಿತು.35ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.36ಆಗ ಎಲೀಷನು ಗೇಹಜಿಗೆ, <<ಶೂನೇಮ್ಯಳನ್ನು ಕರೆ>> ಎಂದು ಆಜ್ಞಾಪಿಸಲು ಅವನು ಆಕೆಯನ್ನು ಕರೆದನು. ಆಕೆಯು ಬಂದಾಗ, ಎಲೀಷನು ಆಕೆಗೆ, <<ನಿನ್ನ ಮಗನನ್ನು ತೆಗೆದುಕೋ>> ಎಂದು ಹೇಳಿದನು.37ಆಕೆಯು ಹತ್ತಿರ ಬಂದು, ಅವನ ಪಾದಗಳಿಗೆ ಬಿದ್ದು ಸಾಷ್ಟಾಂಗನಮಸ್ಕಾರ ಮಾಡಿ, ಮಗನನ್ನು ಕರೆದುಕೊಂಡು ಹೋದಳು.ತಿನ್ನಲು ಯೋಗ್ಯವಾಗುವಂತೆ ಊಟವನ್ನು ಮಾರ್ಪಡಿಸಿದ್ದು
38ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, <<ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು>> ಎಂದು ಆಜ್ಞಾಪಿಸಿದನು.39ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು ಅದನ್ನು ಕಿತ್ತು ಉಡಿಯಲ್ಲಿ ತುಂಬಿಕೊಂಡು, ಅದರ ಕಾಯಿಗಳನ್ನು ಕಿತ್ತುಕೊಂಡು ಬಂದು ತುಂಡು ತುಂಡು ಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ.40ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು. ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, <<ದೇವರ ಮನುಷ್ಯನೇ ಪಾತ್ರೆಯಲ್ಲಿ ವಿಷ>> ಎಂದು ಕೂಗಿದರು. ಅದನ್ನು ತಿನ್ನಲಾರದೆ ಹೋದರು.41ಆಗ ಎಲೀಷನು, <<ಹಿಟ್ಟನ್ನು ತಂದು ಕೊಡಿರಿ>> ಎಂದು ಹೇಳಿದನು. ಅವರು ತಂದಾಗ, ಅದನ್ನು ಆ ಪಾತ್ರೆಯೊಳಗೆ ಹಾಕಿ, <<ಈಗ ಇದನ್ನು ಬಡಿಸಬಹುದು. ಜನರು ಇದನ್ನು ಊಟಮಾಡಲಿ>> ಎಂದನು. ಕೂಡಲೇ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.ಅದ್ಭುತಕರವಾಗಿ ನೂರು ಜನರನ್ನು ಪೋಷಿಸಿದ್ದು
42ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, <<ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ>> ಎಂದು ಹೇಳಿದನು.43ಅದಕ್ಕೆ ಅವನು, <<ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ>> ಎಂದನು. ಎಲೀಷನು ಅವನಿಗೆ, <<ಇರಲಿ, ಕೊಡು. ಅವರು ಊಟಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಎನ್ನುತ್ತಾನೆ>> ಎಂದು ಹೇಳಿದನು.44ಸೇವಕರು ಬಡಿಸಲು, ಯೆಹೋವನ ಮಾತಿನಂತೆ ಜನರು ಊಟಮಾಡಿ, ತೃಪ್ತರಾಗಿ, ಇನ್ನೂ ಉಳಿಸಿಕೊಂಡರು.
5ಎಲೀಷನು ಕುಷ್ಠರೋಗಿಯಾದ ನಾಮಾನನನ್ನು ವಾಸಿಮಾಡಿದ್ದು
1ಅರಾಮ್ಯರ ಅರಸನಿಗೆ ನಾಮಾನನೆಂಬ ಒಬ್ಬ ಸೇನಾಧಿಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದ್ದದರಿಂದ ಅರಸನು ಇವನನ್ನು ಮಹಾ ಪುರುಷನೆಂದೂ ಸನ್ಮಾನಯೋಗ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.2ಅರಾಮ್ಯರು ಒಂದು ಸಾರಿ ಸುಲಿಗೆ ಮಾಡುವುದಕ್ಕೋಸ್ಕರ ಇಸ್ರಾಯೇಲರ ಪ್ರಾಂತ್ಯಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದಿದ್ದರು. ಆಕೆಯು ನಾಮಾನನ ಹೆಂಡತಿಗೆ ಸೇವಕಿಯಾದಳು.3ಆಕೆಯು ಒಂದು ದಿನ ತನ್ನ ಯಜಮಾನಿಯ ಬಳಿ, <<ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅವನು ನನ್ನ ಯಜಮಾನನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು>> ಎಂದು ಹೇಳಿದಳು.4ನಾಮಾನನು ಅರಸನ ಸನ್ನಿಧಿಗೆ ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತಿಳಿಸಿದನು.5ಅರಾಮ್ಯರ ಅರಸನು ಅವನಿಗೆ, <<ನೀನು ಅಲ್ಲಿಗೆ ಹೋಗಿ ಬಾ. ನಾನು ನಿನ್ನ ಕೈಯಲ್ಲಿ ಇಸ್ರಾಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ>> ಎಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, (ಮೂವತ್ತು ಸಾವಿರ) ಆರು ಸಾವಿರ ತೊಲೆ ಬಂಗಾರ, ಹತ್ತು ಜೊತೆ ಬಟ್ಟೆಗಳು ಇವುಗಳನ್ನು ತೆಗೆದುಕೊಂಡು ಸಮಾರ್ಯಕ್ಕೆ ಹೋಗಿ,6ಪತ್ರವನ್ನು ಇಸ್ರಾಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, <<ನನ್ನ ಸೇವಕನಾದ ನಾಮಾನನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ, ನೀನು ಅವನ ಕುಷ್ಠರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೋ>> ಎಂಬುದಾಗಿ ಬರೆದಿತ್ತು.7ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, <<ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ>> ಎಂದು ಹೇಳಿದನು.8ಇಸ್ರಾಯೇಲರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ, <<ನೀನು, ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು, ಇಸ್ರಾಯೇಲರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬುದು ಅವನಿಗೆ ಗೊತ್ತಾಗಲಿ>> ಎಂದು ಹೇಳಿ ಕಳುಹಿಸಿದನು.9ನಾಮಾನನು ರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು.10ಎಲೀಷನು ಅವನಿಗೆ, <<ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ>> ಎಂದು ಹೇಳಿ ಕಳುಹಿಸಿದನು.11ನಾಮಾನನು ಇದನ್ನು ಕೇಳಿ ಕೋಪಗೊಂಡು, <<ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.12ದಮಸ್ಕದ ಅಬಾನಾ ಮತ್ತು ಪರ್ಪರ್ ಎಂಬ ನದಿಗಳು ಇಸ್ರಾಯೇಲರ ಎಲ್ಲಾ ನದಿ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ಶುದ್ಧನಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ?>> ಎಂದು ಹೇಳಿ, ಬಲು ಸಿಟ್ಟಿನಿಂದ ಹೊರಟುಹೋದನು.13ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ, <<ಸ್ವಾಮೀ, ಪ್ರವಾದಿಯು ಒಂದು ಕಠಿಣವಾದ ಕೆಲಸ ಹೇಳಿದ್ದರೆ, ಅದನ್ನು ನೀವು ಮಾಡುತ್ತಿದ್ದಿರಲ್ಲವೇ? ಹಾಗಾದರೆ <ಸ್ನಾನಮಾಡಿ ಶುದ್ಧನಾಗು> ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು>> ಎಂದು ಹೇಳಿದರು.14ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.15ಅನಂತರ, ನಾಮಾನನು ತನ್ನ ಪರಿವಾರದವರೊಡನೆ, ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ, ಅವನ ಮುಂದೆ ನಿಂತು, <<ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವುದೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು. ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು>> ಎಂದು ಹೇಳಿದನು.16ಅದಕ್ಕೆ ಎಲೀಷನು, <<ನಾನು ಸೇವೆಮಾಡುತ್ತಿರುವ ನನ್ನ ದೇವರು ನಿಜವಾಗಿಯೂ ಜೀವಿಸುವ ದೇವರಾದದರಿಂದ ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ>> ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ಕಾಣಿಕೆಯನ್ನು ತೆಗೆದುಕೊಳ್ಳಲೇ ಇಲ್ಲ.17ಆಗ ನಾಮಾನನು ಎಲೀಷನಿಗೆ, <<ನೀನು ನನ್ನ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ನಿನ್ನ ಸೇವಕನಾದ ನನಗೆ ಎರಡು ಹೇಸರಗತ್ತೆಯ ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಯೆಹೋವನೊಬ್ಬನಿಗೇ ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸಬೇಕೆಂದಿದ್ದೇನೆ.18ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ, ನನ್ನ ಒಡೆಯನು ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಮಾತ್ರ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು>> ಎಂದನು.19ಎಲೀಷನು ಅವನಿಗೆ, <<ಸಮಾಧಾನದಿಂದ ಹೋಗು>> ಎಂದು ಉತ್ತರ ಕೊಟ್ಟನು. ಅವನು ಹೊರಟುಹೋದನು.ಗೇಹಜಿಯ ದುರಾಶೆ
20ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, <<ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು>> ಅಂದುಕೊಂಡು ಹೊರಟನು.21ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು ರಥದಿಂದ ಇಳಿದು ಅವನನ್ನು ಎದುರುಗೊಂಡು, <<ಎಲ್ಲಾ ಕ್ಷೇಮವೋ?>> ಎಂದು ಕೇಳಿದನು.22ಅದಕ್ಕೆ ಗೇಹಜಿಯು, <<ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಳಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗೋಸ್ಕರ ಬೇಗನೇ ಒಂದು ತಲಾಂತು ಬೆಳ್ಳಿಯನ್ನೂ, ಎರಡು ಜೋಡಿ ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂದು ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು>> ಎಂದು ಉತ್ತರ ಕೊಟ್ಟನು.23ನಾಮಾನನು, <<ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೆ?>> ಎಂದು ಅವನನ್ನು ಒತ್ತಾಯಪಡಿಸಿ ಎರಡು ಚೀಲಗಳಲ್ಲಿ ಬೆಳ್ಳಿ ನಾಣ್ಯಗಳನ್ನು ತುಂಬಿಸಿ, ಆ ಚೀಲಗಳಲ್ಲಿ ಎರಡು ಜೋಡಿ ಬಟ್ಟೆಗಳನ್ನೂ ಇಟ್ಟು ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಅವನ ಮುಂದೆ ನಡೆದರು.24ಗೇಹಜಿಯು ಗುಡ್ಡವನ್ನು ಮುಟ್ಟಿದಾಗ, ಎರಡು ಚೀಲ ಬೆಳ್ಳಿಯನ್ನು ತೆಗೆದುಕೊಂಡು ಮನೆಯಲ್ಲಿ ಅಡಗಿಸಿಟ್ಟು, ಆಳುಗಳನ್ನು ಕಳುಹಿಸಿಬಿಟ್ಟನು, ಅವರು ಹೊರಟು ಹೋದರು.25ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, <<ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?>> ಎಂದು ಕೇಳಿದನು. ಅದಕ್ಕೆ ಅವನು, <<ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ>> ಎಂದು ಉತ್ತರಕೊಟ್ಟನು.26ಆಗ ಎಲೀಷನು ಗೇಹಜಿಗೆ, <<ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?27ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು>> ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.
6ಮುಳುಗಿದ್ದ ಕೊಡಲಿ ತೇಲಾಡಿದ್ದು
1ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, <<ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳವು ಬಹಳ ಇಕ್ಕಟ್ಟಾಗಿದೆ.2ಆದುದರಿಂದ ನಾವು ಯೊರ್ದನಿಗೆ ಹೋಗಿ, ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು, ನಮ್ಮ ವಾಸಕ್ಕಾಗಿ ಒಂದು ಮನೆಯನ್ನು ಮಾಡಿಕೊಳ್ಳೋಣ>> ಎಂದರು. ಎಲೀಷನು ಅವರಿಗೆ, <<ಹೋಗಿಬನ್ನಿರಿ>> ಎಂದು ಹೇಳಿದನು.3ಅವರಲ್ಲೊಬ್ಬನು, <<ದಯವಿಟ್ಟು ನೀನೂ, ನಿನ್ನ ಸೇವಕರು ನಮ್ಮ ಜೊತೆಯಲ್ಲಿ ಬರಬೇಕು>> ಎಂದು ಬೇಡಿಕೊಂಡನು. ಅದಕ್ಕೆ ಎಲೀಷನು, <<ಬರುತ್ತೇನೆ>> ಎಂದು ಹೇಳಿ ಅವರೊಡನೆ ಹೊರಟನು.4ಅವರು ಯೊರ್ದನಿಗೆ ಹೋಗಿ ಮರಗಳನ್ನು ಕಡಿಯುತ್ತಿರುವಾಗ,5ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, <<ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು>> ಎಂದು ಕೂಗಿದನು.6ದೇವರ ಮನುಷ್ಯನು ಅವನಿಗೆ, <<ಅದು ಎಲ್ಲಿ ಬಿದ್ದಿತು?>> ಎಂದು ಕೇಳಲು, ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಮುರಿದು ಅಲ್ಲಿ ಹಾಕಿದನು, ಕೂಡಲೆ ಕೊಡಲಿಯು ಮೇಲಕ್ಕೆ ಬಂದು ತೇಲಾಡಿತು.7ಎಲೀಷನು <<ಅದನ್ನು ತೆಗೆದುಕೋ>> ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು.ಅರಾಮ್ಯರ ಸೋಲು
8ಅರಾಮ್ಯರ ಅರಸನು ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ತನ್ನ ಸೇನಾಧಿಪತಿಗಳಿಗೆ, <<ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ಗೊತ್ತುಮಾಡಬೇಕು>> ಎಂದನು.9ದೇವರ ಮನುಷ್ಯನು ಇಸ್ರಾಯೇಲರ ಅರಸನಿಗೆ, <<ಜಾಗರೂಕತೆಯಿಂದಿರಿ, ನೀವು ಇಂಥಿಂಥ ಸ್ಥಳದಲ್ಲಿ ಹೋಗಬಾರದು. ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ>> ಎಂದು ತಿಳಿಸುತ್ತಿದ್ದನು.10ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲರ ಅರಸನು ಹೇಳಿ ಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.11ಇದರ ದೆಸೆಯಿಂದ ಅರಾಮ್ಯರ ಅರಸನು ಕಳವಳಗೊಂಡು ತನ್ನ ಸೇನಾಧಿಪತಿಗಳನ್ನು ಕರೆದು ಅವರನ್ನು, <<ನಮ್ಮವರಲ್ಲಿ ಇಸ್ರಾಯೇಲರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವುದಿಲ್ಲವೋ>> ಎಂದು ಕೇಳಿದನು.12ಆಗ ಅವರಲ್ಲೊಬ್ಬನು ಅವನಿಗೆ, <<ನನ್ನ ಒಡೆಯನಾದ ಅರಸನೇ, ಹಾಗಲ್ಲ, ಇಸ್ರಾಯೇಲರಲ್ಲಿ ಎಲೀಷನೆಂಬ ಒಬ್ಬ ಪ್ರವಾದಿಯಿರುತ್ತಾನೆ. ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲರ ಅರಸನಿಗೆ ತಿಳಿಸುತ್ತಾನೆ>> ಎಂದನು.13ಅರಸನು ಇದನ್ನು ಕೇಳಿ, <<ಎಲೀಷನು ಎಲ್ಲಿರುತ್ತಾನೆ ಎಂದು ವಿಚಾರಿಸಿರಿ. ನಾನು ಅವನನ್ನು ಹಿಡಿಸುತ್ತೇನೆ>> ಎಂದು ಹೇಳಿದನು. <<ಪ್ರವಾದಿಯು ದೋತಾನಿನಲ್ಲಿ ಇರುತ್ತಾನೆ>> ಎಂದು ಅರಸನು ತಿಳಿದುಕೊಂಡನು.14ಆಗ ಅರಸನು ರಥರಥಾಶ್ವ ಸಹಿತವಾದ ಮಹಾಸೈನ್ಯವನ್ನು ದೋತಾನಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಆ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆ ಹಾಕಿದರು.15ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, <<ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?>> ಎಂದನು.16ಆಗ ಎಲೀಷನು ಅವನಿಗೆ, <<ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ>> ಎಂದು ಹೇಳಿ,17<<ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ>> ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು.18ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, <<ಸ್ವಾಮಿ, ಈ ಜನರನ್ನು ಕುರುಡರನ್ನಾಗಿ ಮಾಡು>> ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.19ಆಗ ಎಲೀಷನು ಅವರಿಗೆ, <<ನೀವು ಹೋಗಬೇಕೆಂದಿದ್ದ ಪಟ್ಟಣವೂ, ದಾರಿಯೂ ಇದಲ್ಲ, ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ>> ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರೆದುಕೊಂಡು ಹೋದನು.20ಅವರು ಸಮಾರ್ಯದೊಳಗೆ ಬಂದಾಗ ಎಲೀಷನು, <<ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ>> ಎಂದು ಯೆಹೋವನನ್ನು ಬೇಡಿಕೊಂಡದ್ದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು.21ಇಸ್ರಾಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, <<ಅಪ್ಪಾ, ನಾನು ಇವರನ್ನು ಸಂಹರಿಸಿ ಬಿಡಲೋ? ಸಂಹರಿಸಲೇ?>> ಎಂದು ಕೇಳಿದನು.22ಅದಕ್ಕೆ ಅವನು, <<ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ>> ಎಂದು ಉತ್ತರಕೊಟ್ಟನು.23ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ.ಯೆಹೋವನು ಪಟ್ಟಣವನ್ನು ರಕ್ಷಿಸಿದ್ದು
24ಆ ನಂತರ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.25ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.26ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, <<ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು>> ಎಂದು ಮೊರೆಯಿಟ್ಟಳು.27ಅರಸನು ಆಕೆಗೆ, <<ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ, ದ್ರಾಕ್ಷಿ ಆಲೆಯಲ್ಲಾಗಲಿ ಏನಾದರೂ ಉಂಟೋ>> ಎಂದು ಕೇಳಿ,28<<ನಿನಗಿರುವ ದುಃಖ ಯಾವುದು>> ಎಂದು ಅರಸನು ಕೇಳಿದನು. ಆಗ ಆಕೆಯು, <<ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಈ ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ>> ಎಂದು ಹೇಳಿದ್ದರಿಂದ,29ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದು ಬಿಟ್ಟೆವು. ಮರುದಿನ ನಾನು ಆಕೆಗೆ, <<ಈ ಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ, ಅವನನ್ನು ಕೊಂದು ತಿನ್ನೋಣ ಅಂದಾಗ ಆಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು>> ಎಂದು ಹೇಳಿದಳು.30ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈ ಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು.31ಇದಲ್ಲದೆ ಅವನು, <<ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ>> ಎಂದು ಆಣೆಯಿಟ್ಟುಕೊಂಡನು.32ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, <<ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ>> ಎಂದು ಹೇಳಿದನು.33ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, <<ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು>> ಎಂದನು.
71ಆಗ ಎಲೀಷನು ಅವನಿಗೆ, <<ಯೆಹೋವನ ವಾಕ್ಯವನ್ನು ಕೇಳು, ಆತನು, <ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು> >> ಎನ್ನುತ್ತಾನೆ ಎಂದು ಹೇಳಿದನು.2ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, <<ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು>> ಎನ್ನಲು ಎಲೀಷನು ಅವನಿಗೆ, <<ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ>> ಎಂದು ಹೇಳಿದನು.ಅರಾಮ್ಯರ ಪಲಾಯನ
3ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, <<ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?4ಪಟ್ಟಣದೊಳಗೆ ಬರವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ>> ಎಂದು ಮಾತನಾಡಿಕೊಂಡರು.5ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.6ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, <<ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ>> ಅಂದುಕೊಂಡು,7ತಮ್ಮ ಗುಡಾರಗಳನ್ನೂ, ಕತ್ತೆ ಕುದುರೆಗಳನ್ನೂ ಪಾಳೆಯದಲ್ಲಿದ್ದುದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.8ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ, ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.9ಅನಂತರ ಅವರು, <<ಇದು ಶುಭವಾರ್ತೆಯ ದಿನವಾಗಿದೆ. ನಾವು ಇದನ್ನು ಪ್ರಕಟಿಸದಿರುವುದು ಒಳ್ಳೇಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದುದರಿಂದ ಹೋಗಿ ಅರಸನಿಗೆ ಈ ಸಂಗತಿ ತಿಳಿಸೋಣ>> ಎಂದು ಮಾತನಾಡಿಕೊಂಡು ಅಲ್ಲಿಂದ ಹೊರಟರು.10ಊರಬಾಗಿಲಿಗೆ ಬಂದು ಕಾವಲುಗಾರರಿಗೆ, <<ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ>> ಎಂದು ಕೂಗಿ ಹೇಳಿದರು.11ಬಾಗಿಲು ಕಾಯುವವರು ಕೂಡಲೆ ಅರಸನ ಮನೆಯವರನ್ನು ಕೂಗಿ, ಅವರಿಗೆ ಈ ವರ್ತಮಾನವನ್ನು ತಿಳಿಸಿದರು.12ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, <<ಅರಾಮ್ಯರ ಉಪಾಯವನ್ನು ಹೇಳುತ್ತೇನೆ ಕೇಳಿರಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುವುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಜೀವ ಸಹಿತವಾಗಿ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ>> ಎಂದನು.13ಆಗ ಅವರಲ್ಲೊಬ್ಬನು ಅರಸನಿಗೆ, <<ರಾಹುತರು ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಾಯೇಲರ ಗತಿಯಾಗಲಿ, ಸತ್ತುಹೋದವರ ಗತಿಯಾಗಲಿ, ಸಂಭವಿಸುವುದಷ್ಟೆ>> ಎಂದು ಹೇಳಿದನು.14ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ, ಅರಾಮ್ಯರ ಸೈನ್ಯವು ಎಲ್ಲಿರುತ್ತದೆ ಎಂಬುವುದನ್ನು ನೋಡಿ, ಬರುವುದಕ್ಕಾಗಿ ರಾಹುತರನ್ನು ಕಳುಹಿಸಿದನು.15ಅವರು ಯೊರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಸಾಡಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.16ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.17ಅರಸನು ತನ್ನ ಸಹವರ್ತಿಯಾದ ಸರದಾರನನ್ನು ಊರಬಾಗಿಲು ಕಾಯುವುದಕ್ಕಾಗಿ ಕಳುಹಿಸಿದ್ದರಿಂದ, ಅವನು ಜನರಿಂದ ತುಳಿಯಲ್ಪಟ್ಟು ಸತ್ತು ಹೋದನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ, ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.18ದೇವರ ಮನುಷ್ಯನು ಅರಸನಿಗೆ, <<ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು>> ಎಂದು ಹೇಳಿದನು.19ಆ ಸರದಾರನು ದೇವರ ಮನುಷ್ಯನಿಗೆ, <<ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ, ಇದು ಸಂಭವಿಸಲು ಸಾಧ್ಯವಿಲ್ಲ?>> ಎಂದು ಹೇಳಿದ್ದನು. ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, <<ನೀನು, ಅದನ್ನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವುದಿಲ್ಲ>> ಎಂದು ನುಡಿದಿದ್ದನು.20ಅವನು ಊರುಬಾಗಿಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಮರಣ ಹೊಂದಿದನು. ಎಲೀಷನು ಹೇಳಿದ ಈ ಮಾತು ನೆರವೇರಿತು.
8ಶೂನೇಮ್ಯಳಾದ ಸ್ತ್ರೀಯು ಸ್ವತ್ತನ್ನು ತಿರುಗಿ ಪಡೆದುಕೊಂಡದ್ದು
1ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, <<ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು>> ಎಂದು ಹೇಳಿದನು.2ಆಕೆಯು ದೇವರ ಮನುಷ್ಯನ ಅಪ್ಪಣೆಯಂತೆ ತನ್ನ ಮನೆಯವರೊಡನೆ ಸ್ವದೇಶವನ್ನು ಬಿಟ್ಟು ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷ ವಾಸವಾಗಿದ್ದಳು.3ಏಳು ವರ್ಷಗಳಾದ ನಂತರ ಆಕೆಯು ಫಿಲಿಷ್ಟಿಯರ ದೇಶದಿಂದ ಸ್ವದೇಶಕ್ಕೆ ಬಂದು, ಪರಾಧೀನವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಹೋದಳು.4ಆ ಸಮಯದಲ್ಲಿ ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯೊಂದಿಗೆ ಮಾತನಾಡುತ್ತಾ, <<ಎಲೀಷನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನನಗೆ ವಿವರಿಸು>> ಎಂದು ಆಜ್ಞಾಪಿಸಿದ್ದನು.5ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ಅರಸನಿಗೆ ವಿವರಿಸುತ್ತಿರುವಾಗಲೇ ಜೀವದಾನಹೊಂದಿದ ಹುಡುಗನ ತಾಯಿಯು ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಬಂದಳು. ಕೂಡಲೇ ಗೇಹಜಿಯು, <<ನನ್ನ ಒಡೆಯನೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆಯು ಇವನ ತಾಯಿ>> ಎಂದು ಹೇಳಿದನು.6ಅರಸನು ಈ ವಿಷಯವಾಗಿ ಆ ಸ್ತ್ರೀಯನ್ನು ವಿಚಾರಿಸಲು ಆಕೆಯು ಅದರಂತೆಯೇ ಎಲೀಷನಿಂದಾದ ದೇವರ ಮಹಿಮೆಯ ವಿಷಯವನ್ನು ವಿವರವಾಗಿ ತಿಳಿಸಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, <<ಈಕೆಯ ಹೊಲಮನೆಗಳನ್ನೂ, ಈಕೆಯು ದೇಶವನ್ನು ಬಿಟ್ಟ ದಿನದಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಅವಳಿಗೆ ಕೊಡಿಸು>> ಎಂದು ಆಜ್ಞಾಪಿಸಿ, ಅವನನ್ನು ಆಕೆಯ ಜೊತೆಯಲ್ಲಿ ಕಳುಹಿಸಿದನು.ಎಲೀಷನೂ ಹಜಾಯೇಲನೂ
7ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. <<ದೇವರ ಮನುಷ್ಯನು ಬಂದಿದ್ದಾನೆ>> ಎಂಬ ವರ್ತಮಾನವನ್ನು ಅರಸನು ಕೇಳಿ,8ಅರಸನು ಹಜಾಯೇಲನಿಗೆ, <<ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವುದೋ? ಇಲ್ಲವೋ ಎಂಬುದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು>> ಎಂದು ಆಜ್ಞಾಪಿಸಿದನು.9ಹಜಾಯೇಲನು ದಮಸ್ಕದ ಶ್ರೇಷ್ಠ ವಸ್ತುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, <<ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ, ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ>> ಎಂದು ಹೇಳಿದನು.10ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, <<ಹೇಗೂ ನಿನಗೆ ವಾಸಿಯಾಗುವುದು>> ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ, ಅವನು ಸತ್ತೇ ಹೋಗುವನೆಂದು ಯೆಹೋವನು ನನಗೆ ತಿಳಿಸಿದ್ದಾನೆ ಎಂದು ಹೇಳಿದನು.11ಸ್ಥಿರ ದೃಷ್ಟಿಯಿಂದ ಹಜಾಯೇಲನನ್ನು ದಿಟ್ಟಿಸಿ ನೋಡಿ ಅಳತೊಡಗಿದನು.12ಹಜಾಯೇಲನು ಅವನನ್ನು, <<ನನ್ನ ಒಡೆಯಾ, ಯಾಕೆ ಅಳುತ್ತಿ?>> ಎಂದು ಕೇಳಿದನು. ಅದಕ್ಕೆ ಅವನು, <<ನೀನು ಇಸ್ರಾಯೇಲರಿಗೆ ಎಷ್ಟು ಕೇಡು ಮಾಡುವಿ ಎಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ. ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ. ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ. ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ>> ಎಂದು ಉತ್ತರಕೊಟ್ಟನು.13ಹಜಾಯೇಲನು ಎಲೀಷನಿಗೆ, <<ನಿನ್ನ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೇ; ನನ್ನಿಂದ ಇಂಥಾ ಕ್ರೂರ ಕಾರ್ಯವಾಗುವುದು ಹೇಗೆ?>> ಎಂದು ಕೇಳಲು ಅವನು, <<ನೀನು ಅರಾಮ್ಯರ ಅರಸನಾಗುವಿಯೆಂದು ಯೆಹೋವನು ನನಗೆ ತಿಳಿಸಿದ್ದಾನೆ>> ಎಂದನು.14ಹಜಾಯೇಲನು ಎಲೀಷನನ್ನು ಬಿಟ್ಟು ತನ್ನ ಯಜಮಾನನ ಬಳಿಗೆ ಹೋದಾಗ ಅವನು ಇವನನ್ನು, <<ಎಲೀಷನು ಏನು ಹೇಳಿದನು?>> ಎಂದು ಕೇಳಿದನು. ಅದಕ್ಕೆ ಇವನು, <<ನಿನಗೆ ಹೇಗೂ ಸ್ವಸ್ಥವಾಗುವುದು ಎಂದು ಹೇಳಿದನು>> ಎಂಬುದಾಗಿ ಉತ್ತರಕೊಟ್ಟನು.15ಮರುದಿನ ಬೆಳಿಗ್ಗೆ ಇವನು ಕಂಬಳಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.ಯೆಹೂದ್ಯರ ಅರಸನಾದ ಯೆಹೋರಾಮ್ ಅಹಜ್ಯ
16ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಯೆಹೂದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.17ಇವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.18ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.19ಆದರೂ, ಯೆಹೋವನು ಯೆಹೂದ ರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ ಎಂಬುದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ಸ್ಮರಿಸಿ ಅದನ್ನು ಉಳಿಸಿದನು.20ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು.21ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಯೊರ್ದನ್ ನದಿಯನ್ನು ದಾಟಿ ಚಾಯೀರಿಮಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲಿ ಎದ್ದು ಅವರನ್ನು ಅವರ ರಥಬಲದ ಅಧಿಪತಿಗಳನ್ನು ಸೋಲಿಸಿ ಪಾರಾದನು. ಅವನ ಸೈನ್ಯದವರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.22ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರು ಸ್ವತಂತ್ರರಾದರು.23ಯೆಹೋರಾಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ, ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.24ಯೆಹೋರಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ಅರಸನಾದನು.ಯೆಹೂದ್ಯರ ಅರಸನಾದ ಅಹಜ್ಯ
25ಅಹಾಬನ ಮಗನೂ, ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.26ಅಹಜ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಇಸ್ರಾಯೇಲರ ಅರಸನಾದ ಒಮ್ರಿಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.27ಅಹಜ್ಯನಿಗೆ ಅಹಾಬನ ಕುಟುಂಬದವರೊಂದಿಗೆ ಸಂಬಂಧವಿದ್ದುದ್ದರಿಂದ ಅವನು ಅವರ ಮಾರ್ಗದಲ್ಲೆ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.28ಇದಲ್ಲದೆ ಅಹಜ್ಯನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.29ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಲು ಅವನಿಗೆ ರಾಮದಲ್ಲಿ ಆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕಾಗಿ ಇಜ್ರೇಲಿಗೆ ಬಂದನು. ಹಜಾಯೇಲನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅಹಾಬನ ಮಗನಾದ ಯೋರಾಮನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.
9ಯೇಹುವಿನ ರಾಜಾಭಿಷೇಕ
1ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, <<ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.>>2ಆ ಊರನ್ನು ತಲುಪಿದ ನಂತರ ನಿಂಷಿಯ ಮೊಮ್ಮಗನೂ, ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸಿ, ಅವನು ಸಿಕ್ಕಿದಾಗ ಅವನನ್ನು ಅವರ ಜೊತೆಗಾರರ ಗುಂಪಿನಿಂದ ಒಳಗಿನ ಕೋಣೆಗೆ ಕರೆದುಕೊಂಡು ಹೋಗು.3ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, <<ಯೆಹೋವನು ಹೀಗೆ ಅನ್ನುತ್ತಾನೆ, <ನಾನು ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ> ಎಂಬುದಾಗಿ ಹೇಳಿದ ಕೂಡಲೆ ಬಾಗಿಲು ತೆರೆದು ಓಡಿಹೋಗು>> ಎಂದು ಆಜ್ಞಾಪಿಸಿದನು.4ಆಗ ಯೌವನಸ್ಥನಾದ ಪ್ರವಾದಿಯು ಎಲೀಷನ ಅಪ್ಪಣೆಯಂತೆ ರಾಮೋತ್ ಗಿಲ್ಯಾದಿಗೆ ಹೋದನು.5ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆ ಸೇರಿರುವುದನ್ನು ಕಂಡು ಅವನು ಅವರನ್ನು ಸಮೀಪಿಸಿ, <<ನಾಯಕನೇ ನಿನಗೊಂದು ಮಾತು ಹೇಳುವುದಿದೆ>> ಎಂದನು. ಯೇಹುವು ಅವನಿಗೆ, <<ನಮ್ಮಲ್ಲಿ ಯಾರಿಗೆ?>> ಎಂದು ಕೇಳಲು ಅವನು, <<ಸೇನಾಧಿಪತಿಯಾದ ನಿನಗೆ>> ಎಂದು ಉತ್ತರಕೊಟ್ಟನು.6ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, <<ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಆತನು ನಿನಗೆ, <ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ.7ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.8ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು.9ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿಯು ಅಹಾಬನ ಮನೆಗೂ ಆಗುವುದು.10ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ. ನಾಯಿಗಳು ಅವಳ ಹೆಣವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು> >> ಎನ್ನುತ್ತಾನೆ ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು.11ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, <<ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?>> ಎಂದು ಕೇಳಿದರು. ಅದಕ್ಕೆ ಯೇಹುವು, <<ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ>> ಎಂದು ಉತ್ತರಕೊಟ್ಟನು.12ಆದರೆ ಅವರು, <<ಅದು ಸುಳ್ಳು, ಅವನು ಹೇಳಿದ್ದನ್ನು ತಿಳಿಸು>> ಎಂದು ಅವನನ್ನು ಒತ್ತಾಯಪಡಿಸಿದ್ದರಿಂದ ಯೇಹುವು, <<ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನು ಹೇಳಿದ ಎಲ್ಲ ಮಾತುಗಳನ್ನು ಹೇಳಿದನು.>>13ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು.ಇಸ್ರಾಯೇಲಿನ ಅರಸನಾದ ಯೋರಾಮನ ಕೊಲೆ
14ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು.15ಅರಸನಾದ ಯೋರಾಮನು, ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುತ್ತಿರುವಾಗ ಗಾಯ ಹೊಂದಿದ್ದರಿಂದ, ಅದನ್ನು ವಾಸಿಮಾಡಿಕೊಳ್ಳುವುದಕ್ಕಾಗಿ ಹಿಂದಿರುಗಿ ಇಜ್ರೇಲ ಪಟ್ಟಣಕ್ಕೆ ಬಂದಿದ್ದನು. ಯೇಹುವು ತನ್ನ ಜೊತೆಗಾರರಿಗೆ, <<ನೀವು ನನ್ನವರಾಗಿದ್ದರೆ ಈ ಸುದ್ದಿಯು ಇಜ್ರೇಲನ್ನು ಮುಟ್ಟದಂತೆ ಒಬ್ಬನನ್ನೂ ಈ ಪಟ್ಟಣದಿಂದ ಹೊರಗೆ ಹೋಗದಂತೆ ನೋಡಿಕೊಳ್ಳಿ>> ಎಂದು ಹೇಳಿದನು.16ಅನಂತರ ಯೇಹುವು ರಥದಲ್ಲಿ ಕುಳಿತು ಇಜ್ರೇಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನು ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದನು.17ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, <<ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ>> ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, <<ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೊ? ಎಂದು ಕೇಳುವುದಕ್ಕಾಗಿ ಕಳುಹಿಸು>> ಎಂಬುದಾಗಿ ಆಜ್ಞಾಪಿಸಿದನು.18ರಾಹುತನು ಯೇಹುವನ್ನು ಎದುರುಗೊಂಡು, <<ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ>> ಎನ್ನಲು ಅವನು, <<ಶುಭವಾರ್ತೆಯಿಂದ ನಿನಗೇನಾಗಬೇಕು ನೀನು ನನ್ನ ಹಿಂದೆ ಬಾ>> ಎಂದು ಹೇಳಿದನು. ಕಾವಲುಗಾರನು ಅರಸನಿಗೆ, <<ರಾಹುತನು ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ>> ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.19ಅವನು ಹೋಗಿ ಯೇಹುವನ್ನು ಎದುರುಗೊಂಡು, <<ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ>> ಎನ್ನಲು ಅವನು, <<ಶುಭವಾರ್ತೆಯಿಂದ ನಿನಗೇನಾಗಬೇಕಾಗಿದೆ ನೀನು ನನ್ನ ಹಿಂದೆ ಬಾ>> ಎಂದನು.20ಕಾವಲುಗಾರನು ತಿರುಗಿ ಅರಸನಿಗೆ, <<ಎರಡನೆಯವನೂ ಆ ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚು ಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು ನಿಂಷಿಯ ಮೊಮ್ಮಗನಾದ ಯೇಹುವೇ ಇರಬೇಕು>> ಎಂದು ಹೇಳಿದನು.21ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.22ಯೋರಾಮನು ಅವನನ್ನು ಕಂಡ ಕೂಡಲೆ, <<ಯೇಹುವೇ, ಶುಭವೋ?>> ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, <<ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?>> ಎಂದು ಉತ್ತರಕೊಟ್ಟನು.23ಕೂಡಲೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, <<ಅಹಜ್ಯನೇ, ಇದು ಒಳಸಂಚು>> ಎಂದು ಹೇಳಿ ಓಡಿಹೋದನು.24ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು. ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿ ರಥದಲ್ಲಿ ಬಿದ್ದನು.25ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, <<ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು:26ಯೆಹೋವನು ಅಹಾಬನಿಗೆ, <ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು> ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ, ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಬಿಸಾಡು>> ಎಂದು ಹೇಳಿದನು.ಯೆಹೂದ್ಯರ ಅರಸನಾದ ಅಹಜ್ಯನ ಕೊಲೆ
27ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, <<ಅವನನ್ನೂ ರಥದಲ್ಲಿಯೇ ಹೊಡೆಯಿರಿ>> ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.28ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.29ಅಹಜ್ಯನು ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಯೆಹೂದ್ಯರಿಗೆ ಅರಸನಾಗಿದ್ದನು.ಈಜೆಬೆಲಳ ಕೊಲೆ
30ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು.31ಅನಂತರ ಅರಮನೆಯ ಬಾಗಿಲಿನಿಂದ ಪ್ರವೇಶಮಾಡಿದ ಯೇಹುವನ್ನು ಕಂಡು ಅವನಿಗೆ, <<ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವೋ? ಕ್ಷೇಮವೋ?>> ಎಂದು ಕೇಳಿದಳು.32ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, <<ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?>> ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.33ಅವನು ಅವರಿಗೆ, <<ಆಕೆಯನ್ನು ಕೆಳಗೆ ದೊಬ್ಬಿರಿ>> ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು.34ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, <<ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ>> ಎಂದು ಆಜ್ಞಾಪಿಸಿದನು.35ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.36ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ, <<ಯೆಹೋವನು, ತನ್ನ ದಾಸನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು, ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು.37ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು>> ಎಂದನು.
10ಅಹಾಬನ ಕುಟುಂಬದವರೆಲ್ಲರ ಕೊಲೆ
1ಆಗ ಸಮಾರ್ಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ, ಅಧಿಕಾರಿಗಳಿಗೂ ರಾಜ್ಯಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು.2ಪತ್ರಗಳಲ್ಲಿ, <<ನಿಮ್ಮ ವಶದಲ್ಲಿರುವ ನಿಮ್ಮ ಯಜಮಾನನ ಮಕ್ಕಳೂ, ರಥಾಶ್ವಬಲಗಳೂ, ಕೋಟೆಕೊತ್ತಲುಗಳುಳ್ಳ ಪಟ್ಟಣಗಳೂ, ಯುದ್ಧಾಯುಧಗಳೂ ಇರುತ್ತವಷ್ಟೇ.3ಈ ಪತ್ರವು ಕೈ ಸೇರಿದೊಡನೆ ಆ ರಾಜ ಪುತ್ರರಲ್ಲಿ ಉತ್ತಮನೂ, ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ>> ಎಂಬುದಾಗಿ ಬರೆದಿತ್ತು.4ಅವರು ಬಹಳವಾಗಿ ಭಯಪಟ್ಟು, <<ಇಬ್ಬರೂ ರಾಜರು ಅವನ ಮುಂದೆ ನಿಲ್ಲಲಾರದೆ ಹೋದಮೇಲೆ, ನಾವು ನಿಲ್ಲುವುದು ಹೇಗೆ?>> ಅಂದುಕೊಂಡರು.5ಅನಂತರ ರಾಜಗೃಹಾಧಿಪತಿ, ಪಟ್ಟಣದ ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲ ಸೇರಿ ಯೇಹುವಿಗೆ, <<ನಾವು ನಿನ್ನ ಆಜ್ಞಾಪಾಲರಕರಾದ ಸೇವಕರು. ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ, ನಿನ್ನ ಚಿತ್ತವೇ ನೆರವೇರಲಿ>> ಎಂದು ಹೇಳಿ ಕಳುಹಿಸಿದರು.6ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ, <<ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರ ನಡೆದುಕೊಳ್ಳುವ ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಇಜ್ರೇಲಿಗೆ ಬನ್ನಿರಿ>> ಎಂದು ಆಜ್ಞಾಪಿಸಿದನು. ಆಹಾಬನ ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.7ಪ್ರಧಾನಪುರುಷರು ಪತ್ರಿಕೆಯನ್ನು ಓದಿದೊಡನೆ, ಆ ಎಪ್ಪತ್ತು ಮಂದಿ ರಾಜಪುತ್ರರನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ತುಂಬಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿಕೊಟ್ಟರು.8ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ವರ್ತಮಾನವು ಯೇಹುವಿಗೆ ತಲುಪಿದಾಗ ಅವನು, <<ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಮಾಡಿ ಹಾಕಿರಿ>> ಎಂದು ಆಜ್ಞಾಪಿಸಿದನು.9ಮರುದಿನ ಬೆಳಿಗ್ಗೆ ಯೇಹುವು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ, <<ನೀವು ನಿರಪರಾಧಿಗಳು, ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನನ್ನು ಕೊಂದವನು, ಆದರೆ ಇವರನ್ನೆಲ್ಲಾ ಹತಿಸಿದವರಾರು?10ಇಗೋ, ಯೆಹೋವನ ವಾಕ್ಯವು ಅಹಾಬನ ಮನೆಯವರನ್ನು ಕುರಿತು ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಯೆಹೋವನು ತನ್ನ ಸೇವಕನಾದ ಎಲೀಯನ ಮುಖಾಂತರವಾಗಿ ಹೇಳಿದ್ದನ್ನು ಮಾಡಿದ್ದಾನಷ್ಟೇ>> ಎಂದು ಹೇಳಿದನು.11ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ, ಅವನ ಸರದಾರರೂ, ಆಪ್ತಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ.12ನಂತರ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರು ಉಣ್ಣೆಕತ್ತರಿಸುವ ಮನೆಯ ಬಳಿಗೆ ಬಂದಾಗ,13ಯೇಹುವು ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, <<ನೀವು ಯಾರು?>> ಎಂದು ಕೇಳಿದನು. ಅದಕ್ಕೆ ಅವರು, <<ನಾವು ಅಹಜ್ಯನ ಸಹೋದರರು. ರಾಜಪುತ್ರರನ್ನೂ, ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ>> ಎಂದು ಉತ್ತರ ಕೊಟ್ಟರು.14ಆಗ ಯೇಹುವು ತನ್ನ ಸೇವಕರಿಗೆ, <<ಅವರನ್ನು ಜೀವಸಹಿತ ಹಿಡಿಯಿರಿ>> ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ಕೊಂದು, ಉಣ್ಣೆ ಕತ್ತರಿಸುವ ಮನೆಯ ಬಾವಿಯಲ್ಲಿ ಹಾಕಿಬಿಟ್ಟರು. ಅವರು ನಲ್ವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ತಪ್ಪಿಸಿಕೊಳ್ಳಲು ಬಿಡಲಿಲ್ಲ.15ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, <<ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?>> ಎಂದು ಕೇಳಿದನು. ಅವನು, <<ಹೌದು>> ಎಂದು ಉತ್ತರ ಕೊಟ್ಟನು. ಆಗ ಯೇಹುವು, <<ಹಾಗಾದರೆ ನಿನ್ನ ಕೈಯನ್ನು ಕೊಡು>> ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.16ಯೇಹುವು ಅವನಿಗೆ, <<ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು>> ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.17ಸಮಾರ್ಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.ಬಾಳ್ ದೇವತೆಯ ಆರಾಧಕರ ಹತ್ಯೆ
18ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, <<ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ.19ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು>> ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.20ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, <<ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು>> ಎಂದು ಹೇಳಿದನು.21ಯೇಹುವು ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ, ಬಾಳ್ ದೇವತೆಯನ್ನು ಸೇವಿಸುವ ಭಕ್ತರಲ್ಲಿ ಒಬ್ಬನೂ ತಪ್ಪದೆ ಎಲ್ಲರೂ ಸೇರಿ ಬರಬೇಕೆಂದು ಪ್ರಕಟಿಸಿದನು. ಅವನು ಎಲ್ಲಾ ಕಡೆಗಳಿಗೂ ದೂತರನ್ನು ಕಳುಹಿಸಿದ್ದರಿಂದ ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಎಲ್ಲರೂ ಸೇರಿ ಬಂದಿದ್ದರು. ಬಾಳ್ ದೇವತೆಯ ದೇವಸ್ಥಾನವು ಪೂರ್ಣವಾಗಿ ಅವನ ಪೂಜಾರಿಗಳಿಂದ, ಭಕ್ತರಿಂದ ತುಂಬಿಹೋಯಿತು.22ಯೇಹುವು ವಸ್ತ್ರಗಾರದ ಅಧಿಪತಿಗೆ, <<ಬಾಳ್ ದೇವತೆಯನ್ನು ಸೇವಿಸುವ ಭಕ್ತರೆಲ್ಲರಿಗೂ ಬಟ್ಟೆಗಳನ್ನು ಕೊಡು>> ಎಂದು ಆಜ್ಞಾಪಿಸಿಲು ಅವನು ತಂದುಕೊಟ್ಟನು.23ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯನ್ನು ಸೇವಿಸುವ ಭಕ್ತರಿಗೆ, <<ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ? ವಿಚಾರಿಸಿ ನೋಡಿರಿ. ಬಾಳ್ ದೇವತೆಯ ಭಕ್ತರು ಮಾತ್ರ ಇಲ್ಲಿರಬೇಕು>> ಎಂದು ಹೇಳಿದನು.24ಆಮೇಲೆ ಅವರು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಭತ್ತು ಮಂದಿಯನ್ನು ಕಾಯುವುದಕ್ಕಾಗಿ ಇರಿಸಿ ಯೇಹುವು ಅವರಿಗೆ, <<ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿರಿ. ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವುದು>> ಎಂಬುದಾಗಿ ಆಜ್ಞಾಪಿಸಿದ್ದನು.25ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ, ಸೇನಾಧಿಪತಿಗಳಿಗೂ, <<ಒಳಗೆ ಹೋಗಿ ಅವರೆಲ್ಲರನ್ನೂ ಸಂಹರಿಸಿರಿ. ಒಬ್ಬನೂ ತಪ್ಪಿಸಿಕೊಳ್ಳಬಾರದು>> ಎಂದು ಆಜ್ಞಾಪಿಸಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಪಟ್ಟಣವನ್ನು ಪ್ರವೇಶಿಸಿದರು.26ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.27ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ.28ಹೀಗೆ ಯೇಹುವು ಇಸ್ರಾಯೇಲರಲ್ಲಿ ಬಾಳ್ ದೇವತೆಯ ಪೂಜೆಯನ್ನು ನಿಲ್ಲಿಸಿದನು.29ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.30ಯೆಹೋವನು ಯೇಹುವಿಗೆ, <<ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು>> ಎಂದು ಹೇಳಿದನು.31ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.ಯೇಹುವಿನ ಮರಣ
32ಯೆಹೋವನು ಆ ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರೆಗಳಲ್ಲಿ ಸೋಲಿಸಿದನು.33ಯೊರ್ದನ್ ನದಿಯ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಯಾದ್, ಬಾಷಾನ್ ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳವರನ್ನೂ, ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಾಯೇಲರನ್ನೂ ಬಾಧಿಸಿದನು.34ಯೇಹುವಿನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.35ಯೇಹುವು ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋವಾಹಾಜನು ಅರಸನಾದನು.36ಯೇಹುವು ಸಮಾರ್ಯ ಪಟ್ಟಣದಲ್ಲಿ ವಾಸವಾಗಿದ್ದುಕೊಂಡು ಇಸ್ರಾಯೇಲರನ್ನು ಇಪ್ಪತ್ತೆಂಟು ವರ್ಷಗಳ ಕಾಲ ಆಳಿದನು.
11ಅತಲ್ಯ
1ಅಹಜ್ಯನು ಮರಣಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಪಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.2ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು3ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಿ ಕೊಂಡು ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಆ ಆರು ವರ್ಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು.4ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.5ಯೆಹೋಯಾದಾವನು ಅವರಿಗೆ, <<ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗವು ರಾಜರ ಅರಮನೆಯನ್ನು ಕಾಯಬೇಕು,6ಮೂರರಲ್ಲೊಂದು ಭಾಗವು ಸೂರ್ ಬಾಗಿಲಿನಲ್ಲಿಯೂ, ಮತ್ತೊಂದು ಭಾಗವು ಕಾವಲುದಂಡಿನ ಹಿಂದಿನ ಬಾಗಿಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು.7ಇದಲ್ಲದೆ, ಸಬ್ಬತ್ ದಿನದಲ್ಲಿ ಅರಸನೊಂದಿಗೆ ಯೆಹೋವನ ಆಲಯವನ್ನು ಕಾಯುವುದಕ್ಕಾಗಿ ಬರುವ ಸೈನ್ಯವು ಇಬ್ಬಗೆಯಾಗಿದ್ದುಕೊಂಡು ಯೆಹೋವನ ಆಲಯವನ್ನು ಕಾಯಬೇಕು.8ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು, ಅವನ ಗುಂಪಿನಲ್ಲಿ ನುಗ್ಗುವಂತವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು. ಇದೇ ನನ್ನ ಅಪ್ಪಣೆ>> ಎಂದು ಹೇಳಿದನು.9ಯಾಜಕನಾದ ಯೆಹೋಯಾದಾಮನು ಆಜ್ಞಾಪಿಸಿದಂತೆ, ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ರಾಜಪುತ್ರನ ಬಳಿಗೆ ಬಂದರು.10ಯಾಜಕನಾದ ಯೆಹೋಯಾದಾವನು ಆ ಶತಾಧಿಪತಿಗಳಿಗೆ ಯೆಹೋವನ ಆಲಯದಲ್ಲಿ ಇಡಲ್ಪಟ್ಟಿದ್ದ ರಾಜನಾದ ದಾವೀದನ ಬರ್ಜಿಯನ್ನೂ, ಗುರಾಣಿಗಳನ್ನೂ ಕೊಟ್ಟನು.11ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕೋಸ್ಕರ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಂತರು.12ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, <<ಅರಸನು ಚಿರಂಜೀವಿಯಾಗಿರಲಿ>> ಎಂದು ಕೂಗಿದರು.13ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ ಅವರು ಸೇರಿ ಬಂದಿದ್ದ ಯೆಹೋವನ ಆಲಯಕ್ಕೆ ಬಂದಳು.14ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, <<ದ್ರೋಹ! ದ್ರೋಹ!>> ಎಂದು ಕೂಗಿದಳು.15ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ, ಶತಾಧಿಪತಿಗಳಿಗೆ, <<ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ ಸಿಪಾಯಿಗಳ ಮಧ್ಯದಲ್ಲಿ ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿರಿ ಮತ್ತು ಆಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ>> ಎಂದು ಆಜ್ಞಾಪಿಸಿದನು.16ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ರಾಜನ ಅರಮನೆಗೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದರು.ಯೆಹೋಯಾದಾವನಿಂದ ಧಾರ್ಮಿಕ ಸುಧಾರಣೆ
17ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು.18ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.19ಅಲ್ಲದೆ ಯೆಹೋಯಾದಾವನು ಶತಾಧಿಪತಿಗಳನ್ನು, ಕಾರಿಯರು ಎನ್ನಿಸಿಕೊಳ್ಳುವ ಸೈನ್ಯಗಳ ಕಾವಲುದಂಡನ್ನು, ಸಾಧಾರಣ ಜನರನ್ನು ಅವರೊಡನೆ ಅರಸನಾದ ಯೆಹೋವಾಷನನ್ನು ಯೆಹೋವನ ಆಲಯದಲ್ಲಿ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.20ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿ ನೆಲೆಸಿತು. ಅತಲ್ಯಳನ್ನು ರಾಜನ ಅರಮನೆಯ ಸಮೀಪದಲ್ಲಿ ಕತ್ತಿಯಿಂದ ಸಂಹರಿಸಿದರು.21ಯೆಹೋವಾಷನು ಅರಸನಾದಾಗ ಅವನು ಏಳು ವರ್ಷದವನಾಗಿದ್ದನು.
12ಯೆಹೂದದ ಅರಸನಾದ ಯೆಹೋವಾಷನು
1ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ.2ಯಾಜಕನಾದ ಯೆಹೋಯಾದಾವನು ಯೆಹೋವಾಷನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.3ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.4ಯೆಹೋವಾಷನು ಯಾಜಕರಿಗೆ, <<ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,5ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು>> ಎಂದು ಆಜ್ಞಾಪಿಸಿದನು.6ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡಿರಲಿಲ್ಲ.7ಆದುದರಿಂದ ಅರಸನಾದ ಯೆಹೋವಾಷನು ಯೆಹೋಯಾದಾವ, ಮೊದಲಾದ ಯಾಜಕರನ್ನು ಕರೆದು ಅವರಿಗೆ, <<ನೀವು ಈ ವರೆಗೂ ದೇವಾಲಯವನ್ನೇಕೆ ದುರಸ್ತಿ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರಿಂದ ಹಣವನ್ನು ವಸೂಲಿಮಾಡಿಕೊಳ್ಳದೆ ನಿಮ್ಮಲಿರುವ ಹಣದಿಂದ ದೇವಾಲಯದ ದುರಸ್ತಿಗಾಗಿ ಕಾರ್ಯವನ್ನು ಮಾಡಿರಿ>> ಎಂದು ಹೇಳಿದನು.8ಆಗ ಯಾಜಕರು ಅವನಿಗೆ, <<ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ. ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ>> ಎಂಬುದಾಗಿ ಮಾತುಕೊಟ್ಟರು.9ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತು ಮಾಡಿ, ಅದನ್ನು ಯೆಹೋವನ ಆಲಯದ ಬಾಗಿಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.10ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು.11ಅವರು ತೂಕಮಾಡಿ ಎಣಿಸಿದ ಹಣವನ್ನು, ಯೆಹೋವನ ಆಲಯದ ಕೆಲಸವನ್ನು ನಡಿಸುವ ಮುಖ್ಯಸ್ಥರಿಗೆ ಒಪ್ಪಿಸುವರು. ಅವರು ಅದನ್ನು ಅಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ, ಮೇಸ್ತ್ರಿ, ಕಲ್ಲುಕುಟಿಕ ಇವರ ಸಂಬಳಕ್ಕಾಗಿಯೂ.12ಮರ, ಕೆತ್ತಿದ ಕಲ್ಲುಗಳನ್ನು ಕೊಂಡುಕೊಳ್ಳುವುದಕ್ಕೂ, ಆಲಯವನ್ನು ದುರಸ್ತಿ ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸಿದರು.13ಯೆಹೋವನ ಆಲಯದೊಳಗೆ ತಂದ ಹಣದಿಂದ ಬೆಳ್ಳಿಯ ಬಟ್ಟಲುಗಳನ್ನು, ಕತ್ತರಿಗಳನ್ನು, ಬೋಗುಣಿಗಳನ್ನು, ತುತ್ತೂರಿಗಳನ್ನೂ, ಬೆಳ್ಳಿ ಬಂಗಾರದ ಪಾತ್ರೆ ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸುತ್ತಿರಲಿಲ್ಲ.14ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ದುರಸ್ತಿ ಕಾರ್ಯಮಾಡುವವರ ಸಂಬಳಕ್ಕಾಗಿ ಉಪಯೋಗಿಸುತ್ತಿದ್ದರು.15ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ತರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ.16ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ.17ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.18ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಯನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.19ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.20ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ <<ಸಿಲ್ಲಾ>> ಊರಿಗೆ ಇಳಿದು ಹೋಗುವ ಮಾರ್ಗವಾದ <<ಮಿಲ್ಲೋ>> ಗೃಹದಲ್ಲಿ ಯೆಹೋವಾಷನನ್ನು ಕೊಂದರು.21ಅವರಲ್ಲಿ ಶಿಮೆಯಾತನ ಮಗನಾದ ಯೋಜಾಕಾರ್, ಶೋಮೆರನ ಮಗನಾದ ಯೆಹೋಜಾಬಾದ್ ಎಂಬುವವರು ಅವನ ಮೇಲೆ ಬಿದ್ದು ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದ ನಗರದೊಳಗೆ ಅವನ ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
13ಇಸ್ರಾಯೇಲರ ಅರಸನಾದ ಯೆಹೋವಾಹಾಜನು
1ಯೆಹೂದದ ಅರಸನೂ, ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನೇಳು ವರ್ಷ ಆಳ್ವಿಕೆ ಮಾಡಿದನು.2ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.3ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.4ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು.ಅಲ್ಲದೆ ಅವರು ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟರುವುದನ್ನು ನೋಡಿ,5ಯೆಹೋವನು ಇಸ್ರಾಯೇಲರ ಮೇಲೆ ಕಟಾಕ್ಷವಿಟ್ಟು ಅವರಿಗೆ ಒಬ್ಬ ರಕ್ಷಕನನ್ನು ಅನುಗ್ರಹಿಸಿದನು. ಅವನ ಮುಖಾಂತರವಾಗಿ ಅವರು ಅರಾಮ್ಯರ ಕೈಯಿಂದ ಬಿಡುಗಡೆಯಾಗಿ ಮೊದಲಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.6ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು.7ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.8ಯೆಹೋವಾಹಾಜನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.9ಯೆಹೋವಾಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋವಾಷನು ಅರಸನಾದನು.ಇಸ್ರಾಯೇಲರ ಅರಸನಾದ ಯೋವಾಷನು
10ಯೆಹೂದದ ಅರಸನಾದ ಯೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗನಾದ ಯೆಹೋವಾಷನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನಾರು ವರ್ಷ ಆಳಿದನು.11ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.12ಯೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ, ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.13ಯೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನದಲ್ಲಿ ಸಮಾಧಿಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು.ಎಲೀಷನ ಮರಣ
14ಆ ಕಾಲದಲ್ಲಿ ಎಲೀಷನು ಮರಣಕರವಾದ ರೋಗಕ್ಕೆ ಗುರಿಯಾದನು. ಇಸ್ರಾಯೇಲರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, <<ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥರಥಾಶ್ವಬಲಗಳಾಗಿದ್ದವನೇ>> ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.15ಆಗ ಎಲೀಷನು ಇಸ್ರಾಯೇಲರ ಅರಸನಿಗೆ, <<ಬಿಲ್ಲನ್ನೂ, ಬಾಣಗಳನ್ನೂ ತರಿಸು>> ಎಂದು ಹೇಳಿದನು. ಅವನು ತೆಗೆದುಕೊಂಡನು.16ಆಗ ಎಲೀಷನು ಇಸ್ರಾಯೇಲರ ಅರಸನಿಗೆ, <<ಬಿಲ್ಲನ್ನು ಹಿಡಿದುಕೋ>> ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈಮೇಲಿಟ್ಟನು.17ಎಲೀಷನು, <<ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ>> ಎಂದನು. ಅವನು ತೆರೆದನು. ಅನಂತರ ಎಲೀಷನು, <<ಬಾಣವನ್ನು ಎಸೆ>> ಎಂದು ಆಜ್ಞಾಪಿಸಿದನು. ಅವನು ಎಸೆಯಲು ಎಲೀಷನು, <<ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ>> ಎಂದು ಹೇಳಿದನು.18ಇದಲ್ಲದೆ ಎಲೀಷನು ಇಸ್ರಾಯೇಲರ ಅರಸನಿಗೆ, <<ಬಾಣಗಳನ್ನು ತೆಗೆದುಕೋ>> ಎಂದು ಆಜ್ಞಾಪಿಸಿದಾಗ ಅವನು ಅವುಗಳನ್ನು ತೆಗೆದುಕೊಳ್ಳಲು ಎಲೀಷನು ಅರಸನಿಗೆ, <<ಇವುಗಳಿಂದ ನೆಲವನ್ನು ಹೊಡಿ>> ಎಂದನು. ಅವನು ಮೂರು ಸಾರಿ ಹೊಡೆದು ಸುಮ್ಮನೆ ನಿಂತನು.19ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, <<ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ>> ಎಂದು ಹೇಳಿದನು.20ಎಲೀಷನು ಮೃತಿ ಹೊಂದಲು, ಅವನ ಶವವನ್ನು ಅವರು ಸಮಾಧಿಮಾಡಿದರು. ಮೋವಾಬ್ಯರು ಪ್ರತಿ ವರ್ಷದ ಪ್ರಾರಂಭದಲ್ಲಿ ಸುಲಿಗೆ ಮಾಡುವುದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು.21ಒಂದು ದಿನ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಸತ್ತ ಮನುಷ್ಯನ ದೇಹವು ಎಲೀಷನ ಎಲುಬುಗಳಿಗೆ ತಗಲಿದ ಕೂಡಲೆ ಅವನು ಜೀವ ಬಂದು ಎದ್ದು ನಿಂತನು.ಇಸ್ರಾಯೇಲ್ಯರಿಗೂ ಅರಾಮ್ಯರಿಗೂ ನಡೆದ ಯುದ್ಧ
22ಆದರೆ ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಾಯೇಲರನ್ನು ಪೀಡಿಸುತ್ತಿದ್ದನು.23ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.24ಅರಾಮ್ಯರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗನಾದ ಬೆನ್ಹದದನು ಅರಸನಾದನು.25ಯೆಹೋವಾಹಾಜನ ಮಗನಾದ ಯೆಹೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು.
14ಯೆಹೂದದ ಅರಸನಾದ ಅಮಚ್ಯನು
1ಇಸ್ರಾಯೇಲರ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯ ಎಂಬವನು ಅರಸನಾದನು.2ಅವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಯೆರೂಸಲೇಮಿನವಳಾದ ಯೆಹೋವದ್ದೀನ್ ಎಂಬಾಕೆಯು ಇವನ ತಾಯಿ.3ಇವನು ತನ್ನ ತಂದೆಯಾದ ಯೆಹೋವಾಷನ ಮಾರ್ಗದಲ್ಲಿ ತಪ್ಪದೆ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು, ಆದರೂ ತನ್ನ ಪೂರ್ವಿಕನಾದ ದಾವೀದನಷ್ಟು ಉತ್ತಮನಾಗಿರಲಿಲ್ಲ.4ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ, ಆದ್ದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.5ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೇ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆ ವಿಧಿಸಿದನು.6ಮೋಶೆಯ ಧರ್ಮನಿಯಮಗ್ರಂಥದಲ್ಲಿರುವ ಯೆಹೋವನ ಅಪ್ಪಣೆಯಂತೆ, <<ಮಕ್ಕಳ ಪಾಪದ ದೆಸೆಯಿಂದ ತಂದೆಗೂ, ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು>> ಎಂಬುದನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.7ಇದಲ್ಲದೆ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು, ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.8ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನಾದ ಯೆಹೋವಾಷನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ನಾವು ಒಬ್ಬರನ್ನೊಬ್ಬರು ಒಂದು ಕೈ ನೋಡೋಣ ಬಾ>> ಎಂದು ಹೇಳಿದನು.9ಆಗ ಇಸ್ರಾಯೇಲರ ಅರಸನಾದ ಯೆಹೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ, <<ಲೆಬನೋನಿನ ಮುಳ್ಳು ಗಿಡವು ಅಲ್ಲಿನ ದೇವದಾರುಮರಕ್ಕೆ, <ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು> ಎಂದು ಹೇಳಿ ಕಳುಹಿಸಿತು. ಸ್ವಲ್ಪ ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದುಬಿಟ್ಟಿತು.10ನೀನು ಎದೋಮ್ಯರನ್ನು ಸೋಲಿಸಿದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನದು ಸುಮ್ಮನೆ ಮನೆಯಲ್ಲಿ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ, ನಿನ್ನ ರಾಜ್ಯವಾದ ಯೆಹೂದದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ?>> ಎಂದು ಉತ್ತರ ಕೊಟ್ಟುಕಳುಹಿಸಿದನು.11ಅಮಚ್ಯನು ಇದನ್ನು ಗಮನಕ್ಕೆ ತೆಗೆದುಕೊಳ್ಳದೆ ಇದ್ದುದರಿಂದ ಇಸ್ರಾಯೇಲರ ಅರಸನಾದ ಯೆಹೋವಾಷನು ಯುದ್ಧಕ್ಕೆ ಹೊರಟನು. ಅವರು ಯೆಹೂದ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.12ಯೆಹೂದ್ಯರು ಇಸ್ರಾಯೇಲರಿಂದ ಸೋಲಿಸಲ್ಪಟ್ಟು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.13ಇಸ್ರಾಯೇಲರ ಅರಸನಾದ ಯೋವಾಷನೂ, ಅಹಜ್ಯನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಇಸ್ರಾಯೇಲರ ಅರಸನಾದ ಯೆಹೋವಾಷನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೂ ಇದ್ದ ಯೆರೂಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿ ಬಿಟ್ಟನು.14ಇದಲ್ಲದೆ ಅವನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ, ಪಾತ್ರೆಗಳನ್ನೂ ತೆಗೆದುಕೊಂಡು ಒತ್ತೆಯಾಳಾಗಿ ಕೆಲವರನ್ನು ಸೆರೆಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.15ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ ಮತ್ತು ಯೆಹೂದ ರಾಜನಾದ ಅಮಚ್ಯನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.16ಯೆಹೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯಾರೊಬ್ಬಾಮನು ಅರಸನಾದನು.17ಇಸ್ರಾಯೇಲರ ಅರಸನೂ, ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಯೆಹೂದದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.18ಅಮಚ್ಯನ ಉಳಿದ ಚರಿತ್ರೆಯು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.19ಯೆರೂಸಲೇಮಿನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.20ಅವನ ಜನರು ಅವನ ಶವವನ್ನು ಕುದುರೆಗಳ ಮೇಲೆ ಯೆರೂಸಲೇಮಿಗೆ ತಂದು ದಾವೀದನಗರದೊಳಗೆ ಅವನ ಪೂರ್ವಿಕರ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.21ಅಮಚ್ಯನ ಮರಣದ ನಂತರ ಎಲ್ಲಾ ಯೆಹೂದ್ಯರು ಸೇರಿ ಹದಿನಾರು ವರ್ಷದವನಾದ ಅಜರ್ಯನನ್ನು ಅರಸನನ್ನಾಗಿ ಮಾಡಿದರು.22ಅರಸನಾದ ಅಮಚ್ಯನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಉಜ್ಜೀಯನು ಏಲತ್ ಎಂಬ ಪಟ್ಟಣವನ್ನು ಪುನಃ ಯೆಹೂದರಾಜ್ಯಕ್ಕೆ ಸೇರಿಸಿ ಭದ್ರಪಡಿಸಿದನು.ಇಸ್ರಾಯೇಲರ ಅರಸನಾದ ಎರಡನೆಯ ಯಾರೊಬ್ಬಾಮನು
23ಯೆಹೂದದ ಅರಸನೂ, ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಲ್ವತ್ತೊಂದು ವರ್ಷ ಆಳಿದನು.24ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.25ಇಸ್ರಾಯೇಲರ ದೇವರಾದ ಯೆಹೋವನ ವಾಕ್ಯದ ಮೂಲಕ ತನ್ನ ಸೇವಕನೂ ಗತ್ ಹೇಫೆರಿನವನಾದ ಅಮಿತ್ತೈಯನ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲರ ಮೇರೆಯನ್ನು ಪುನಃ ವಶಪಡಿಸಿಕೊಂಡವನು ಇವನೇ ಆಗಿದ್ದನು.26ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.27ಯೆಹೋವನು ಇದನ್ನು ನೋಡಿ ಇಸ್ರಾಯೇಲರನ್ನು ಭೂಲೋಕದಿಂದ ನಿರ್ನಾಮ ಮಾಡುವುದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ಅವರನ್ನು ರಕ್ಷಿಸಿದನು.28ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.29ಯಾರೊಬ್ಬಾಮನು ಇಸ್ರಾಯೇಲರ ರಾಜರಾಗಿದ್ದ ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ನಂತರ ಅವನ ಮಗನಾದ ಜೆಕರ್ಯನು ಅರಸನಾದನು.
15ಯೆಹೂದದ ಅರಸನಾದ ಅಜರ್ಯ
1ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು.2ಅಜರ್ಯನು ಪಟ್ಟಕ್ಕೆ ಬಂದಾಗ ಅವನು ಹದಿನಾರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆ ಇವನ ತಾಯಿ.3ಅಜರ್ಯನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.4ಆದರೆ, ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ತೆಗೆಯಲ್ಪಡಲಿಲ್ಲವಾದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.5ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.6ಅಜರ್ಯನ ಉಳಿದ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲದ ವೃತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.7ಅಜರ್ಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೋತಾಮನು ಅರಸನಾದನು.ಇಸ್ರಾಯೇಲರ ಅರಸನಾದ ಜೆಕರ್ಯ
8ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಆರು ತಿಂಗಳು ಆಳಿದನು.9ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.10ಯಾಬೇಷನ ಮಗನಾದ ಶಲ್ಲೂಮನು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.11ಜೆಕರ್ಯನ ಉಳಿದ ಚರಿತ್ರೆಯು ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.12<<ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು>> ಎಂಬುದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.ಇಸ್ರಾಯೇಲರ ಅರಸನಾದ ಶಲ್ಲೂಮನು
13ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.14ಗಾದಿಯ ಮಗನಾದ ಮೆನಹೇಮನೆಂಬುವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು, ಅವನಿಗೆ ಬದಲಾಗಿ ತಾನು ಅರಸನಾದನು.15ಶಲ್ಲೂಮನ ಉಳಿದ ಚರಿತ್ರೆಯೂ ಮತ್ತು ಅವನ ಒಳಸಂಚಿನ ವಿವರವೂ ಇಸ್ರಾಯೇಲ್ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.16ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು.ಇಸ್ರಾಯೇಲರ ಅರಸನಾದ ಮೆನಹೇಮನು
17ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು.18ಇವನು ಜೀವದಿಂದ ಇರುವವರೆಗೂ ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.19ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.20ಮೆನಹೇಮನು ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಾಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ರೂಪಾಯಿಗಳನ್ನು ವಸೂಲಿಮಾಡಿಕೊಂಡನು. ಆ ಹಣವು ಸಿಕ್ಕಿದ ನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂತಿರುಗಿ ಹೋದನು.21ಮೆನಹೇಮನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.22ಮೆನಹೇಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಮಗನಾದ ಪೆಕಹ್ಯನು ಇಸ್ರಾಯೇಲರ ಅರಸನಾದನು.ಇಸ್ರಾಯೇಲರ ಅರಸನಾದ ಪೆಕಹ್ಯ
23ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳಿದನು.24ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.25ಇವನ ಸರದಾರನೂ, ರೆಮಲ್ಯನ ಮಗನೂ ಆಗಿದ್ದ ಪೆಕಹನು, ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.26ಪೆಕಹ್ಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.ಇಸ್ರಾಯೇಲರ ಅರಸನಾದ ಪೆಕಹ
27ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರ್ಷ ಆಳಿದನು.28ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.29ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.30ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.31ಪೆಕಹನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.ಇಸ್ರಾಯೇಲರ ಅರಸನಾದ ಯೋತಾಮನು
32ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಉಜ್ಜೀಯನ ಮಗನಾದ ಯೋತಾಮನು ಆಳತೊಡಗಿದನು.33ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷಾ ಇವನ ತಾಯಿ.34ಇವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.35ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.36ಯೋತಾಮನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.37ಯೆಹೋವನು ಆ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನನ್ನೂ, ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದ್ಯರಿಗೆ ವಿರೋಧವಾಗಿ ಕಳುಹಿಸತೊಡಗಿದನು.38ಯೋತಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಅವನ ಪೂರ್ವಿಕರ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.
16ಯೆಹೂದದ ಅರಸನಾದ ಆಹಾಜನು
1ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.2ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲರ ಮಾರ್ಗವನ್ನು ಹಿಡಿದನು.3ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.4ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.5ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹ ಎಂಬುವವರು ಒಟ್ಟಿಗೆ ಸೇರಿ ಯೆರೂಸಲೇಮಿಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ.6ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸತೊಡಗಿದರು.ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.7ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು>> ಎಂದು ಕೇಳಿಕೊಂಡನು.8ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.9ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.10ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ, ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರೀಯನಿಗೆ ಕಳುಹಿಸಿದನು.11ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.12ಅರಸನು ದಮಸ್ಕದಿಂದ ಹಿಂತಿರುಗಿ ಬಂದ ಮೇಲೆ ಆ ಯಜ್ಞವೇದಿಯನ್ನು ಕಂಡು, ಸಮೀಪಕ್ಕೆ ಹೋಗಿ, ಅದರ ಮೇಲೆ ಬಲಿಗಳನ್ನು ಅರ್ಪಿಸಿದನು.13ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯನೈವೇದ್ಯ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.14ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.15ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, <<ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು>> ಎಂದು ಹೇಳಿದನು.16ಯಾಜಕನಾದ ಊರೀಯನು ಅರಸನಾದ ಆಹಾಜನು ಹೇಳಿದಂತೆಯೇ ಮಾಡಿದನು.17ಅರಸನಾದ ಆಹಾಜನು ಅಶ್ಶೂರದ ಅರಸನ ನಿಮಿತ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.18ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ಶೂರದ ಅರಸನಾದ ಈ ಆಹಾಜನೇ.19ಆಹಾಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ್ಯರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.20ಆಹಾಜನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.
17ಇಸ್ರಾಯೇಲರ ಕೊನೆಯ ಅರಸನಾದ ಹೋಶೇಯನು
1ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗನಾದ ಹೋಶೇಯನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂಭತ್ತು ವರ್ಷ ಆಳಿದನು.2ಹೋಶೇಯನು ತನ್ನ ಪೂರ್ವಿಕರಾದ ಇಸ್ರಾಯೇಲರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.3ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.4ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.ಸಮಾರ್ಯದ ಪತನ
5ಇದಲ್ಲದೆ, ಅಶ್ಶೂರದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದನು.6ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.ಇಸ್ರಾಯೇಲರ ಸೋಲಿಗೆ ಕಾರಣಗಳು
7ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.8ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಜನಾಂಗಗಳ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅನುಸರಿಸಿದರು.9ಇಸ್ರಾಯೇಲರು ತಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದ ಗುಪ್ತವಾದ ದುಷ್ಟ ಕೃತ್ಯಗಳನ್ನು ನಡಿಸಿದರು. ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು.10ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು.11ಅಲ್ಲಿ ಅವರು ಯೆಹೋವನು ತಮ್ಮ ಎದುರಿನಿಂದ ಹೊರಡಿಸಿ ಜಡಿಸಿದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಹಾಕಿ, ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು.12<<ನೀವು ಇಂತಹ ಕೃತ್ಯಗಳನ್ನು ಮಾಡಬಾರದು>> ಎಂದು ಯೆಹೋವನು ಅವರಿಗೆ ಆಜ್ಞಾಪಿಸಿದ್ದರೂ ಅವರು ಆತನ ಅಜ್ಞೆಯನ್ನು ಮೀರಿ ಅವರು ವಿಗ್ರಹಗಳನ್ನು ಆರಾಧಿಸಿದರು.13ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, <<ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ>> ಎಂದು ಖಂಡಿತವಾಗಿ ಹೇಳಿಸಿದನು.14ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.15ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.16ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.17ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು.18ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.19ಯೆಹೂದ್ಯರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲರ ಪದ್ಧತಿಯನ್ನು ಅನುಸರಿಸಿದರು.20ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.21ಆತನು ಇಸ್ರಾಯೇಲರ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು.22ಇಸ್ರಾಯೇಲರು ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದು ಅವನು ಮಾಡಿದ ಪಾಪಗಳನ್ನು ತೊರೆದು ಬಿಡಲಿಲ್ಲ.23ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.ಸಮಾರ್ಯದವರೆನ್ನಿಸಿಕೊಳ್ಳುವ ಮಿಶ್ರಜನಾಂಗದವರ ಉತ್ಪತ್ತಿ
24ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.25ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು.26ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ, <<ನೀನು ಸಮಾರ್ಯ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿದ್ದಾನೆ>> ಎಂದು ತಿಳಿಸಿದರು.27ಆಗ ಅಶ್ಶೂರದ ಅರಸನು ಅವರಿಗೆ, <<ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅವರಿಗೆ ಕಲಿಸಲಿ>> ಎಂದು ಆಜ್ಞಾಪಿಸಿದನು.28ಅವರು ಸಮಾರ್ಯದಿಂದ ಸೆರೆಯವನಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು ಜನರಿಗೆ ಯೆಹೋವನ ಭಕ್ತಿಯನ್ನು ಬೋಧಿಸಿದನು.29ಆದರೂ ಆ ಜನಾಂಗಗಳವರು ತಮ್ಮ ದೇವತೆಯ ವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳಲ್ಲಿ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪ್ರತಿಷ್ಠಿಸಿ ಪೂಜಿಸುತ್ತಿದ್ದರು.30ಬಾಬೆಲಿನವರು ಸುಕ್ಕೋತ್ಬೆನೋತ್ ನನ್ನೂ, ಕೂತದವರು ನೇರ್ಗೆಲ್ ನನ್ನೂ ಹಮಾತಿನವರು ಅಷೀಮನನ್ನು ಮಾಡಿದರು.31ಅವ್ವಿಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಮಾಡಿ ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ಅದ್ರಮ್ಮೆಲೆಕ್, ಅನಮ್ಮೆಲೆಕ್ ಎಂಬ ತಮ್ಮ ಕುಲ ದೇವತೆಗಳನ್ನಾಗಿ ಪೂಜಿಸುತ್ತಾ ತಮ್ಮ ಮಕ್ಕಳನ್ನು ಬಲಿ ಅಗ್ನಿಪ್ರವೇಶ ಮಾಡಿಸುತ್ತಿದ್ದರು.32ಅವರು ಯೆಹೋವನ ಭಕ್ತರಾಗಿದ್ದರೂ ಮನಸ್ಸಿಗೆ ಬಂದವರನ್ನು ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು.33ಯೆಹೋವನ ಭಕ್ತರಾಗಿದ್ದರೂ ತಾವು ಬಿಟ್ಟು ಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.34ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಿದ್ದಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ. ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾವಿಧಿಗಳನ್ನು, ಧರ್ಮನಿಯಮಗಳನ್ನು ಅನುಸರಿಸುವುದಿಲ್ಲ.35ಯೆಹೋವನು ಇಸ್ರಾಯೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, <<ನೀವು ಅನ್ಯದೇವತೆಗಳಿಗೆ ಭಯಪಡಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಆರಾಧಿಸಲೂಬಾರದು, ಯಜ್ಞವನ್ನರ್ಪಿಸಲೂಬಾರದು.36ನಿಮ್ಮನ್ನು ಮಹಾಶಕ್ತಿ, ಭುಜಬಲಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನಗೊಬ್ಬನಿಗೇ ಕೈಮುಗಿದು ಯಜ್ಞವರ್ಪಿಸಬೇಕು.37ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.38ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆಯದೆ ಇರಬೇಕು. ಅನ್ಯದೇವತೆಗಳನ್ನು ಪೂಜಿಸಬಾರದು.39ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು>> ಎಂದು ಹೇಳಿದನು.40ಅವರು ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.41ಆ ಜನಾಂಗಗಳವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೂ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.
18ಯೆಹೂದದ ಅರಸನಾದ ಹಿಜ್ಕೀಯನು
1ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳ್ವಿಕೆಗೆ ಬಂದನು.2ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆಯು ಇವನ ತಾಯಿ.3ಇವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.4ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ <<ನೆಹುಷ್ಟಾನ್ >> ಎಂಬ ಹೆಸರಿತ್ತು.5ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ.6ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು.7ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.8ಗಾಜ ಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ, ಕಾವಲುಗಾರರ ಗೋಪುರ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಚಿಕ್ಕಗ್ರಾಮ ಮೊದಲುಗೊಂಡು ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ನಾಶಮಾಡಿದನು.9ಇಸ್ರಾಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿ ಅದನ್ನು ವಶಪಡಿಸಿಕೊಂಡನು.10ಮೂರು ವರ್ಷಗಳ ತರುವಾಯ, ಇಸ್ರಾಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ಸ್ವಾಧೀನಮಾಡಿಕೊಂಡನು.11ಅಶ್ಶೂರದ ಅರಸನು ಇಸ್ರಾಯೇಲರನ್ನು ಸೆರೆಹಿಡಿದು ಅವರನ್ನು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.12ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.ಅಶ್ಶೂರದವರು ಹಾಕಿದ ಬೆದರಿಕೆ
13ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.14ಆಗ ಯೆಹೂದ್ಯರ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ನಾನು ಅಪರಾಧಿ; ನೀನು ನನ್ನನ್ನು ಬಿಟ್ಟು ಹೋಗು. ನೀನು ನನಗೆ ವಿಧಿಸುವಷ್ಟು ದಂಡವನ್ನು ಕೊಡುತ್ತೇನೆ>> ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ , ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.15ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ, ಅರಸನ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನು ಅವನಿಗೆ ಕೊಟ್ಟನು.16ಅಲ್ಲದೆ ಹಿಜ್ಕೀಯನು ಯೆಹೋವನ ಆಲಯದ ಕದಗಳಿಗೂ, ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದು ಅಶ್ಶೂರದ ಅರಸನಿಗೆ ಕಳುಹಿಸಿದನು.17ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು.18ಅವರು ಅರಸನನ್ನು ಕೂಗಿ ಕರೆದಾಗ, ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಅವರ ಬಳಿಗೆ ಬಂದರು.19ರಬ್ಷಾಕೆಯು ಅವರಿಗೆ, ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ. ಅವನು, <<ನಿನ್ನ ಭರವಸಕ್ಕೆ ಯಾವ ಆಧಾರವುಂಟು?20ಬರೀ ಒಂದು ಬಾಯಿ ಮಾತಿನಲ್ಲಿ ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟೆಂದು ಅಂದುಕೊಳ್ಳುತ್ತಿರುವೆಯೋ? ನೀನು ಯಾರ ಮೇಲೆ ಭರವಸವಿಟ್ಟು ನನಗೆ ವಿರೋಧವಾಗಿ ತಿರುಗಿ ಬಿದ್ದಿರುವೆ?21ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುವೆಯೋ? ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ; ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಇದೇ ಗತಿಯಾಗುವುದು.22ಒಂದು ವೇಳೆ ನೀವು, <ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ> ಎಂದು ಹೇಳುವುದಾದರೆ ಹಿಜ್ಕೀಯನು, <ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು> ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,23ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಸವಾಲು ಮಾಡಿನೋಡು. ಆಗ ಕುದುರೆ ಸವಾರರನ್ನು ಬಳಸಲು ನಿನಗೆ ಸಾಮರ್ಥ್ಯವಿದ್ದರೆ ಆತನು ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ.24ಹೀಗಿದ್ದಾಗ ನೀನು ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತಿ ಸಣ್ಣವನನ್ನಾದರೂ ಸೋಲಿಸುವುದು ಸಾಧ್ಯವೇ? ರಥಾಶ್ವಬಲಗಳ ವಿಷಯವಾಗಿ ನೀನು ಐಗುಪ್ತರ ಮೇಲೆ ಭರವಸೆಯಿಟ್ಟಿರುವೆ.25ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? <ಈ ದೇಶಕ್ಕೆ ಬಂದು, ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದ್ದಾನೆ> >> ಎಂದನು.26ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, <<ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವ ಯೆಹೂದ್ಯರಿಗೂ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು, ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ>> ಎಂದು ಹೇಳಿದರು.27ಅದಕ್ಕೆ ರಬ್ಷಾಕೆಯು, <<ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು>> ಎಂದು ಉತ್ತರಕೊಟ್ಟನು.28ನಂತರ, ರಬ್ಷಾಕೆಯು ಎದ್ದು ನಿಂತು ಯೂದಾಯ ಭಾಷೆಯಲ್ಲಿ, <<ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.29ಅರಸನು ನಿಮಗೆ, <ಹಿಜ್ಕೀಯನಿಂದ ಮೋಸಹೋಗಬೇಡಿರಿ, ಅವನು ನಿಮ್ಮನ್ನು ನನ್ನ ಕೈಯಿಂದ ಬಿಡಿಸಲಾರನು>30ಹಿಜ್ಕೀಯನು ನಿಮಗೆ, <ಯೆಹೋವನ ಮೇಲೆ ಭರವಸದಿಂದಿರಿ; ಆತನು ನಿಮ್ಮನ್ನು ಹೇಗೂ ರಕ್ಷಿಸುವನು. ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ> ಎಂಬುದಾಗಿ ಹೇಳಿದರೆ ಅವನ ಮಾತಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ>>31ಹಿಜ್ಕೀಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, <<ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿ ಆಗ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.32ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.33ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಸಾಧ್ಯ?34ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ ಮತ್ತು ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಲು ಸಾಧ್ಯವಾಯಿತೇ?35ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಆಗದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ?>> ಎಂದು ಹೇಳಿದನು.36ಆ ಸೇನಾಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು. ಏನೂ ಹೇಳಲಿಲ್ಲ.37ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್ ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
19ಹಿಜ್ಕೀಯನು ಪ್ರವಾದಿಯಾದ ಯೆಶಾಯನನ್ನು ವಿಚಾರಿಸಿದ್ದು
1ಅರಸನಾದ ಹಿಜ್ಕೀಯನು ಅದನ್ನು ಕೇಳಿ, ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.2ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.3ಅವರು ಹಿಜ್ಕೀಯನಿಗೆ, <<ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.4ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ>> ಎಂದು ಹೇಳಿರಿ ಅಂದನು.5ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದಾಗ,6ಯೆಶಾಯನು ಅವರಿಗೆ, <<ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, <ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.7ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು> ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ>> ಎಂದು ಉತ್ತರಕೊಟ್ಟನು.ಅಶ್ಶೂರದವರು ಹಾಕಿದ ಇನ್ನೊಂದು ಬೆದರಿಕೆ
8ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.9ಅಷ್ಟರಲ್ಲಿ ಐಗುಪ್ತದ ಅರಸನೂ ಮತ್ತು ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡಲು ಹೊರಟಿದ್ದಾನೆ ಎಂಬ ಸುದ್ದಿಯನ್ನು ಸನ್ಹೇರೀಬನು ಕೇಳಿದಾಗ, ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ಪುನಃ ದೂತರನ್ನು ಕಳುಹಿಸಿ,10ಅವರ ಮುಖಾಂತರ, <<ಯೆಹೂದದ ಅರಸನಾದ ಹಿಜ್ಕೀಯನಿಗೆ, <ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ11ಅಶ್ಶೂರದ ಅರಸುಗಳು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿರುವರೆಂದು ಕೇಳಿರುವೆಯಲ್ಲಾ. ಹೀಗಿದ್ದ ಮೇಲೆ ನೀನು ತಪ್ಪಿಸಿಕೊಳ್ಳುವೆಯೋ?12ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?13ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.> >>ಹಿಜ್ಕೀಯನ ಪ್ರಾರ್ಥನೆ
14ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.15ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, <<ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.16ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.17ಯೆಹೋವನೇ, ಅಶ್ಶೂರದ ಅರಸರು ದೇಶಗಳನ್ನೂ ಜನಾಂಗಗಳನ್ನೂ ಹಾಳುಮಾಡಿದರು.18ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.19ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು>> ಎಂದು ಪ್ರಾರ್ಥಿಸಿದನು.ಸನ್ಹೇರೀಬನ ಪತನವನ್ನು ಯೆಶಾಯನು ಮುಂತಿಳಿಸಿದ್ದು
20ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, <<ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, <ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.>21ಯೆಹೋವನು ಅವನನ್ನು ಕುರಿತು,<<ಕನ್ನಿಕೆಯಾಗಿರುವ ಚೀಯೋನಿನ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ.
ಯೆರೂಸಲೇಮಿನ ಕುಮಾರ್ತೆಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.
22ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ?ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ?
ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ
ಸದಮಲಸ್ವಾಮಿಯನ್ನಲ್ಲವೇ!
23ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ,ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ.
ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ
ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ.
ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ,
ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
24ನಾನು ಅನ್ಯದೇಶದಲ್ಲಿ ಬಾವಿಗಳನ್ನು ಅಗೆದು ನೀರು ತೆಗೆದು ಕುಡಿದಿದ್ದೇನೆ!ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ನದಿಗಳನ್ನು ಬತ್ತಿಸಿದ್ದೇನೆ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದೀಯಲ್ಲವೇ?>>
25ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ?ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ.
ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು
ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತೋ?
26ಅವುಗಳ ನಿವಾಸಿಗಳು ಬಲವಿಲ್ಲದವರಾಗಿಹೆದರಿ ಆಶಾಭಂಗಪಟ್ಟು ಕಳವಳಗೊಂಡರು;
ಅವರು ಹೊಲದ ಗಿಡಕ್ಕೂ ಕಾಯಿ ಪಲ್ಯಕ್ಕೂ
ಹಸಿರು ಹುಲ್ಲಿಗೂ, ಮನೆಯ ಮೇಲೆ ಬೆಳೆಯುವ ಹಾಗೂ, ಹೊಲದ ಹುಲ್ಲಿನ ಹಾಗೆ ಬೆಳೆಯುವುದಕ್ಕಿಂತ
ಮೊದಲೇ ಸುಟ್ಟುಹೋದ ಪೈರಿಗೆ ಸಮಾನರಾದರು.
27<<ನೀನು ಕುಳಿತುಕೊಳ್ಳುವುದು,ಹೋಗುವುದು, ಬರುವುದೂ ನನಗೆ ಗೊತ್ತುಂಟು.
ನೀನು ನನ್ನ ಮೇಲೆ ರೌದ್ರಾವೇಷವಾಗಿರುವುದನ್ನು ಬಲ್ಲೆನು.
28ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ,ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ.
ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ
ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು>> ಎಂಬುದಾಗಿ ಹೇಳಿದ್ದಾನೆ.
29ಈ ಮಾತುಗಳು ನೆರವೇರುವವು ಎಂಬುದಕ್ಕೆನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ
ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ,
ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು,
ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
30ತಪ್ಪಿಸಿಕೊಂಡು ಉಳಿದ ಯೆಹೂದ್ಯರುದೇಶದಲ್ಲಿ ನೆಲೆಗೊಂಡು ಅಭಿವೃದ್ದಿಯಾಗುವರು.
31ಯೆರೂಸಲೇಮಿನಲ್ಲಿ ಉಳಿದವರು ಹಬ್ಬಿ ಹರಡಿಕೊಳ್ಳುವರು,ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ದಿಹೊಂದುವರು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವೇ ಇದನ್ನು ನೆರವೇರಿಸುವುದು.
32ಯೆಹೋವನು ಅಶ್ಶೂರದ ಅರಸನ ವಿಷಯವಾಗಿ,<<ನನ್ನ ಮಾತನ್ನು ಕೇಳು
ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ.
ಅದಕ್ಕೆ ಬಾಣವನ್ನೆಸೆಯುವುದಿಲ್ಲ.
ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ.
ಅದನ್ನು ಕೆಡವಿಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಸೃಷ್ಟಿಸುವುದಿಲ್ಲ.
33ಅವನು ಬಂದ ದಾರಿಯಿಂದಲೇಹಿಂದಿರುಗಿ ಹೋಗುವನು.
ಈ ಪಟ್ಟಣಕ್ಕೆ ಬರುವುದೇ ಇಲ್ಲ ಎಂದು ಹೇಳಿದ್ದಲ್ಲದೆ
34ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು>> ಎಂದು ವಾಗ್ದಾನ ಮಾಡಿದ್ದಾನೆ. 35ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.36ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಮಾಡಿದನು.37ಅವನು ಒಂದು ದಿನ ದೇವಾಲಯಕ್ಕೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿದ್ದಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬುವವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನ ನಂತರ ಅವನ ಮಗನಾದ ಏಸರ್ ಹದ್ದೋನನು ಅರಸನಾದನು. 20ಹಿಜ್ಕೀಯನ ರೋಗ ನಿವಾರಣೆ
1ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, << <ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ> ಎಂದು ಯೆಹೋವನು ತಿಳಿಸಿದ್ದಾನೆ>> ಎಂದು ಹೇಳಿದನು.2ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು.3<<ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ>> ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.4ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲು ಯೆಹೋವನಿಂದ ಅಪ್ಪಣೆಯಾಯಿತು.5<<ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, <ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.6ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು> ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು>> ಅಂದನು.7ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು.8ಹಿಜ್ಕೀಯನು ಯೆಶಾಯನಿಗೆ, <<ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ, ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ, ಇರುವ ಗುರುತು ಏನು?>> ಎಂದು ಕೇಳಿದನು.9ಅದಕ್ಕೆ ಯೆಶಾಯನು, <<ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ?ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?>> ಎಂದು ಕೇಳಿದನು.10ಅದಕ್ಕೆ ಹಿಜ್ಕೀಯನು, <<ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು>> ಎಂದು ಹೇಳಿದನು.11ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು.ಬಾಬೆಲಿನಿಂದ ಬಂದ ದೂತರು
12ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.13ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.14ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನನ್ನು, <<ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?>> ಎಂದು ಕೇಳಲು ಅವನು, <<ಅವರು ಬಹು ದೂರ ದೇಶವಾದ ಬಾಬೆಲಿನಿಂದ ಬಂದವರು>> ಎಂದು ಉತ್ತರ ಕೊಟ್ಟನು.15ಯೆಶಾಯನು ತಿರುಗಿ ಹಿಜ್ಕೀಯನನ್ನು, <<ಅವರು ನಿನ್ನ ಮನೆಯಲ್ಲಿ ಏನು ನೋಡಿದರು?>> ಎಂದು ಕೇಳಲು ಅವನು, <<ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಂದು ವಸ್ತುವು ಇರುವುದಿಲ್ಲ>> ಎಂದನು.16ಆಗ ಯೆಶಾಯನು ಹಿಜ್ಕೀಯನಿಗೆ, <<ಯೆಹೋವನ ಮಾತನ್ನು ಕೇಳು,17<ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬೆಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ.18ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ> >> ಎಂದು ಹೇಳಿದನು.19ಹಿಜ್ಕೀಯನು ಯೆಶಾಯನಿಗೆ, <<ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?>> ಎಂದು ಕೊಂಡನು.20ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.21ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.
21ಯೆಹೂದದ ಅರಸನಾದ ಮನಸ್ಸೆಯು
1ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.2ಅವನು ಯೆಹೋವನು ಇಸ್ರಾಯೇಲರ ರಾಜ್ಯದಿಂದ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.3ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.4ಇದಲ್ಲದೆ, <<ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು>> ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು.5ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವ ನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.6ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.7ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ಯೆಹೋವನ ಆಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಮತ್ತು ಅವನ ಮಗನಾದ ಸೊಲೊಮೋನನಿಗೂ, <<ಈ ಆಲಯದಲ್ಲಿಯೂ, ಇಸ್ರಾಯೇಲರ ಸಕಲ ಗೋತ್ರಗಳಲ್ಲಿಯೂ, ನಾನು ಆರಿಸಿಕೊಂಡ ಯೆರೂಸಲೇಮಿನಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು8ಇಸ್ರಾಯೇಲರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಧರ್ಮಶಾಸ್ತ್ರದ ನಿಯಮ ನಿಬಂಧನೆಗಳನ್ನು ಅನುಸರಿಸಿ, ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿಯೂ, ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ, ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲ ಇರುವಂತೆ ಮಾಡುವೆನು, ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲಾದ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು>> ಎಂದು ಹೇಳಿದನು.9ಆದರೆ ಇಸ್ರಾಯೇಲರು ಆತನ ಮಾತನ್ನು ಕೇಳದೆ ಮನಸ್ಸೆಯಿಂದ ಪ್ರೇರೇಪಿತರಾಗಿ ತಮ್ಮ ಮುಂದೆಯೇ ಯೆಹೋವನಿಂದ ಸಂಹೃತವಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.10ಆಗ ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ,11<<ಯೆಹೂದ್ಯರ ಅರಸನಾದ ಮನಸ್ಸೆಯು ಮೊದಲು ಇದ್ದ ಅಮೋರಿಯರ ಕೃತ್ಯಗಳಿಗಿಂತಲೂ ಅಸಹ್ಯವಾದ ಕೃತ್ಯಗಳನ್ನು ನಡಿಸಿದ್ದರಿಂದಲೂ, ವಿಗ್ರಹಗಳನ್ನು ಪೂಜಿಸಲು ಯೆಹೂದ್ಯರನ್ನು ಪ್ರೇರೇಪಿಸಿದ್ದರಿಂದಲೂ,12ಇಸ್ರಾಯೇಲಿನ ದೇವರಾದ ಯೆಹೋವನೆಂಬ ನಾನು ಯೆರೂಸಲೇಮಿನವರ ಮೇಲೆಯೂ, ಯೆಹೂದದವರ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವರ ಎರಡು ಕಿವಿಗಳು ಬಿರಿದು ಹೋಗುವವು.13ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ, ಅಹಾಬನ ಮನೆಯನ್ನೂ ನೆಲಸಮಮಾಡಿದಂತೆ, ಯೆರೂಸಲೇಮನ್ನೂ ಅದರಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿ ಬೋರಲು ಹಾಕುವೆನು.14ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಎಲ್ಲಾ ಶತ್ರುಗಳು ಬಂದು ಅವರ ಸ್ವತ್ತನ್ನು ಸುಲಿದು ಸೂರೆಮಾಡುವರು.15ಅವರು ತಮ್ಮ ಪೂರ್ವಿಕರ ಕಾಲದಲ್ಲಿ ಐಗುಪ್ತದೇಶವನ್ನು ಬಿಟ್ಟುಬಂದರೂ ತಮ್ಮ ಪಾಪಗಳನ್ನು ಬಿಡದೆ ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ>> ಎಂದು ಹೇಳಿಸಿದನು.16ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.17ಮನಸ್ಸೆಯ ಉಳಿದ ಚರಿತ್ರೆಯೂ ಅವನ ಎಲ್ಲಾ ಕ್ರಿಯೆಗಳೂ, ಅವನು ಮಾಡಿದ ಪಾಪಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.18ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ನಂತರ ಅವನ ಮಗನಾದ ಆಮೋನನು ಅರಸನಾದನು.ಯೆಹೂದದ ಅರಸನಾದ ಆಮೋನನು
19ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು. ಯೊಟ್ಬಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆಯು ಅವನ ತಾಯಿ.20ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.21ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.22ತನ್ನ ಪೂರ್ವಿಕರ ದೇವರಾದ ಯೆಹೋವನನ್ನೂ ಆರಾಧಿಸದೆ, ಆತನಿಗೆ ಮೆಚ್ಚಿಗೆಯಾಗುವಂತೆ ನಡೆಯುವ ಮಾರ್ಗವನ್ನೂ ಬಿಟ್ಟುಬಿಟ್ಟನು.23ಮನಸ್ಸೆಯ ಸೇವಕರು ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಅರಸನ ಅರಮನೆಯಲ್ಲಿಯೇ ಕೊಂದುಹಾಕಿದರು.24ಆದರೆ ದೇಶದ ಜನರು ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಆಮೋನನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.25ಆಮೋನನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.26ಆಮೋನನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು.
22ಯೆಹೂದದ ಅರಸನಾದ ಯೋಷೀಯನು
1ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ.2ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.3ಅರಸನಾದ ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚಲ್ಯನ ಮಗನೂ, ಮೆಷುಲ್ಲಾಮನ ಮೊಮ್ಮಗನೂ, ಯೆಹೋವನ ಆಲಯದ ಲೇಖಕನೂ ಆದ ಶಾಫಾನನನ್ನು ಕರೆದು ಅವನಿಗೆ,4<<ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು,5ಅದಲ್ಲದೆ ಆಲಯದ ಕೆಲಸಮಾಡಿಸುವ ಮುಖ್ಯಸ್ಥರಿಗೆ ಅದನ್ನು ಒಪ್ಪಿಸು ಎಂದು ಹೇಳಬೇಕು, ಮುಖ್ಯಸ್ಥರು ಅದನ್ನು ಯೆಹೋವನ ಆಲಯದ ದುರಸ್ತಿ ಕೆಲಸಕ್ಕೆ ಉಪಯೋಗಿಸಲಿ,6ಬಡಗಿ, ಶಿಲ್ಪಿ, ಮೇಸ್ತ್ರಿ ಮೊದಲಾದವರ ಸಂಬಳಕ್ಕಾಗಿಯೂ, ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಅದನ್ನು ಉಪಯೋಗಿಸಿಕೊಳ್ಳಲಿ,7ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು>> ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು.ಧರ್ಮೋಪದೇಶಗ್ರಂಥವು ದೊರೆತದ್ದು
8ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, <<ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ>> ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು.9ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, <<ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು.10ಇದಲ್ಲದೆ, ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ>> ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.11ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.12ಅರಸನು ಯಾಜಕನಾದ ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ,13<<ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ>> ಎಂದು ಆಜ್ಞಾಪಿಸಿದನು.14ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು <<ಹುಲ್ದ>> ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ಯಾಜಕವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು.15ಹುಲ್ದಳು ಅವರಿಗೆ, <<ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ತಿಳಿಸಿರಿ.16ಯೆಹೋವನು, <ಈ ದೇಶದ ಮೇಲೆಯೂ ಮತ್ತು ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಆಪತ್ತುಗಳನ್ನು ಬರಮಾಡುವನು.17ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ> ಎನ್ನುತ್ತಾನೆ.18ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲರ ದೇವರಾದ ಯೆಹೋವನ ಮಾತೇನೆಂದರೆ,19<ನಾನು ಈ ದೇಶವನ್ನೂ, ನಿವಾಸಿಗಳನ್ನೂ, ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುವುದನ್ನು ನೀನು ಕೇಳಿದಾಗ, ದುಃಖಪಟ್ಟು ಯೆಹೋವನಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು>20ಆದುದರಿಂದ, <ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು> ಎಂದು ಹೇಳಿದ್ದನ್ನು ತಿಳಿಸಿರಿ>> ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.
23ಧರ್ಮಸಂಸ್ಥಾಪನೆ
1ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇಮಿನ ಮತ್ತು ಯೆಹೂದ ಪ್ರಾಂತ್ಯಗಳಲ್ಲಿರುವ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.2ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.3ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.4ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.5ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳನಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ, ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.6ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.7ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ, ವೇಶ್ಯವೃತ್ತಿಯವರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ್ ದೇವತೆಗಳಿಗಾಗಿ ಗುಡಾರದ ಬಟ್ಟೆಗಳನ್ನು ನೇಯುತ್ತಿದ್ದರು.8ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರೆಯಿಸಿಕೊಂಡು ಅವರು ಧೂಪಹಾಕುತ್ತಿದ್ದ ಪೂಜಾಸ್ಥಳಗಳನ್ನು ನಾಶಮಾಡಿಸಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿ ಹಾಕಿಸಿದನು.9ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ, ಅವರಿಗೆ ಯೆರೂಸಲೇಮಿನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ.10ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೆನ್ ಹಿನ್ನೋಮ್ ತಗ್ಗಿನಲ್ಲಿದ್ದ <<ತೋಫೆತ್>> ಎಂಬ ಯಜ್ಞವೇದಿಯ ಸ್ಥಳವನ್ನು ಹೊಲೆಮಾಡಿದನು.11ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಿಲಿನ ಹೊರಗೆ <<ಪರ್ವರೀಮ್>> ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.12ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.13ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.14ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.15ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.16ಯೋಷೀಯನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡಗಳಲ್ಲಿ ಸಮಾಧಿಗಳನ್ನು ಕಂಡು, ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಟ್ಟು ಅವುಗಳನ್ನು ನಾಶಮಾಡಿದನು. ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೋವನ ವಾಕ್ಯವು ನೆರವೇರಿತು.17ಇದಲ್ಲದೆ, ಅವನು ಒಂದು ಸಮಾಧಿಶಿಲೆಯನ್ನು ಕಂಡು, ಅದು ಏನು? ಎಂದು ವಿಚಾರಿಸಲು ಆ ಊರಿನವರು, <<ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿ>> ಎಂದು ಉತ್ತರಕೊಟ್ಟರು.18ಆಗ ಯೋಷೀಯನು, <<ಬಿಡಿರಿ, ಆ ಮನುಷ್ಯನ ಎಲುಬುಗಳನ್ನು ಯಾರೂ ಮುಟ್ಟಬಾರದು>> ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರ್ಯದೇಶದ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ.19ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಪೂಜಾಸ್ಥಳಗಳನ್ನು ಗುಡಿಗಳನ್ನು ಕಟ್ಟಿಸಿ, ಯೆಹೋವನ ಕೋಪಕ್ಕೆ ಕಾರಣವಾದಂಥವುಗಳನ್ನು ಯೋಷೀಯನು ತೆಗೆದುಕೊಂಡು, ಬೇತೇಲಿನಲ್ಲಿ ನಾಶಮಾಡಿದ ಹಾಗೆ ಅವೆಲ್ಲವನ್ನು ನಾಶಮಾಡಿದನು.20ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು.ಪಸ್ಕಹಬ್ಬದ ಆಚರಣೆ
21ಅನಂತರ ಅರಸನು ಎಲ್ಲಾ ಜನರಿಗೆ, <<ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು>> ಎಂದು ಆಜ್ಞಾಪಿಸಿದನು.22ಇಂಥ ಪಸ್ಕಹಬ್ಬವು ಇಸ್ರಾಯೇಲರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ, ಇಸ್ರಾಯೇಲರ ಮತ್ತು ಯೆಹೂದ್ಯರ ಅರಸರ ಕಾಲದಲ್ಲಾಗಲಿ ನಡೆಯಲೇ ಇಲ್ಲ.23ಈ ಪಸ್ಕಹಬ್ಬವು ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೆರೂಸಲೇಮಿನಲ್ಲಿ ಯೆಹೋವನಿಗಾಗಿ ಆಚರಿಸಲ್ಪಟ್ಟಿತು.24ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.25ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಹಿಂದಿನ ಕಾಲದಲ್ಲೂ ಆ ನಂತರದ ಕಾಲದಲ್ಲೂ ಇರಲಿಲ್ಲ.26ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.27ಯೆಹೋವನು, <<ಇಸ್ರಾಯೇಲರನ್ನು ತೆಗೆದುಹಾಕಿದಂತೆ, ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು, ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮದ ಮಹಿಮೆಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು>> ಎಂದು ಹೇಳಿದನು.28ಯೋಷೀಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆಯಲಾಗಿದೆ.29ಅವನ ಕಾಲದಲ್ಲಿ, ಐಗುಪ್ತದ ಅರಸನಾದ ಫರೋಹ ನೆಕೋ ಎಂಬುವವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ಎದ್ದು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಅಲ್ಲಿ ಅವನಿಂದ ಹತನಾದನು.30ಯೋಷೀಯನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ನಂತರ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.ಯೆಹೂದದ ಅರಸನಾದ ಯೆಹೋವಾಹಾಜನು
31ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ನದವನಾದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.32ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.33ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ , ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.34ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮರಣ ಹೊಂದಿದನು.35ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು.ಯೆಹೂದದ ಅರಸನಾದ ಯೆಹೋಯಾಕೀಮನು
36ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ರೂಮನ ಪೆದಾಯನ ಮಗಳಾದ ಜೆಬೂದಾ ಎಂಬಾಕೆಯು ಅವನ ತಾಯಿ.37ಯೆಹೋಯಾಕೀಮನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
241ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.2ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.3ಯೆಹೂದ ರಾಜ್ಯದ ನಿರಪರಾಧಿಗಳ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸದೆ ಹೋದನು.4ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.5ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ (ಇತಿಹಾಸ) ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.6ಯೆಹೋಯಾಕೀಮನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.7ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ.ಯೆಹೂದದ ಅರಸನಾದ ಯೆಹೋಯಾಖೀನನು
8ಯೆಹೋಯಾಖೀನನು ಅರಸನಾದಾಗ ಅವನು ಹದಿನೆಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಯೆರೂಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆಯು ಇವನ ತಾಯಿ.9ಇವನು ತನ್ನ ತಂದೆಯಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.10ಇವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮ್ ಪಟ್ಟಣಕ್ಕೆ ವಿರುದ್ಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.11ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಮುತ್ತಿಗೆ ಹಾಕಿದ ಯೆರೂಸಲೇಮ್ ಪಟ್ಟಣಕ್ಕೆ ನೆಬೂಕದ್ನೆಚ್ಚರನೂ ಬಂದನು.12ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.13ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.14ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.15ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀನನನ್ನೂ, ಅವನ ತಾಯಿ, ಹೆಂಡತಿ, ಕಂಚುಕಿಗಳನ್ನೂ ಮತ್ತು ದೇಶದ ಪ್ರಧಾನ ಪುರುಷರನ್ನೂ ಯೆರೂಸಲೇಮಿನಿಂದ ಬಾಬೆಲೋನಿಗೆ ಸೆರೆಯಾಗಿ ತೆಗೆದುಕೊಂಡುಹೋದನು.16ಬಾಬೆಲಿನ ಅರಸನು ಏಳು ಸಾವಿರ ಮಂದಿ ಭಟರನ್ನೂ, ಸಾವಿರ ಮಂದಿ ಕಮ್ಮಾರರನ್ನೂ, ಬಡಗಿಗಳನ್ನು ಯೆರೂಸಲೇಮಿನಿಂದ ಬಾಬೆಲೋನಿಗೆ ಕರೆದುಕೊಂಡು ಹೋದನು. ಅವರೆಲ್ಲರೂ ಪರಾಕ್ರಮಶಾಲಿಗಳೂ ಯುದ್ಧವೀರರೂ ಆಗಿದ್ದರು.17ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಚಿದ್ಕೀಯನೆಂದು ಹೆಸರಿಟ್ಟನು.ಯೆಹೂದದ ಅರಸನಾದ ಚಿದ್ಕೀಯನು
18ಚಿದ್ಕೀಯನು ತನ್ನ ಇಪ್ಪತ್ತೊಂದನೆಯ ವರ್ಷ ತುಂಬಿದ ಮೇಲೆ ಅರಸನಾಗಿ ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಲಿಬ್ನ ಪಟ್ಟಣದವನಾದ, ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.19ಚಿದ್ಕೀಯನು ಯೆಹೋಯಾಕೀಮನಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.20ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.
25ಯೆರೂಸಲೇಮಿನ ಪತನ
1ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.2ಅವನು ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.3ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.4ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.5ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು.6ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.7ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬೆಲೋನಿಗೆ ತೆಗೆದುಕೊಂಡು ಹೋದರು.8ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.9ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.10ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.11ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.12ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.13ಕಸ್ದೀಯರು ಯೆಹೋವನ ಆಲಯದಲ್ಲಿದ್ದ ತಾಮ್ರದ ಕಂಬಗಳನ್ನು, ಪೀಠಗಳನ್ನೂ, ಕಡಲಿನ ಆಕಾರದ ಪಾತ್ರೆಯನ್ನೂ ಒಡೆದು ಅವುಗಳ ತಾಮ್ರವನ್ನೂ ಬಾಬೆಲೋನಿಗೆ ತೆಗೆದುಕೊಂಡು ಹೋದರು.14ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.15ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಕೆ, ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.16ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಡಲೆನಿಸಿಕೊಂಡ ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರವನ್ನು ಬಳಸಲಾಗಿತ್ತು.17ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬೆ ಹಣ್ಣುಗಳೂ ಇದ್ದವು.18ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,19ಸೈನ್ಯ ಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುತ್ತಿದ್ದ ಕಂಚುಕಿ, ಪಟ್ಟಣದಲ್ಲಿ ಉಳಿದಿದ್ದ ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ಜನರೂ ಇದ್ದರು.20ನಂತರ ನೆಬೂಜರದಾನನು, ಇವರನ್ನೆಲ್ಲಾ ಹಿಡಿದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು,21ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.ದೇಶಾಧಿಪತಿಯಾದ ಗೆದಲ್ಯನು
22ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ, ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬುವನನ್ನು ಅಧಿಪತಿಯನ್ನಾಗಿ ನೇಮಿಸಿದನು.23ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.24ಗೆದಲ್ಯನು ಇವರಿಗೂ ಇವರ ಜನರಿಗೂ, <<ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ, ಬಾಬೆಲಿನ ಅರಸನಿಗೆ ವಿಧೇಯರಾಗಿದ್ದು ಸೇವೆಮಾಡಿಕೊಂಡು ಇಲ್ಲಿಯೇ ವಾಸಮಾಡಿರಿ. ಆಗ ನಿಮಗೆ ಒಳಿತಾಗುವಾಗುವುದು>> ಎಂದು ಹೇಳಿದನು.25ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.26ಆಗ ಎಲ್ಲಾ ಚಿಕ್ಕವರೂ, ದೊಡ್ಡವರೂ, ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿ ಐಗುಪ್ತಕ್ಕೆ ಓಡಿಹೋದರು.ಯೆಹೋಯಾಖೀನನು ಬಿಡುಗಡೆ ಹೊಂದಿದ್ದು
27ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು.28ಅಲ್ಲದೆ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.29ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.30ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಅರಸನಿಂದಲೇ ಅವನಿಗೆ ಕೊಡಲಾಗುತ್ತಿತ್ತು.
1 ಪೂರ್ವಕಾಲವೃತ್ತಾಂತ
1ಆದಾಮನಿಂದ ಅಬ್ರಹಾಮನವರೆಗೆ ಬೆಳೆದು ಬಂದ ವಂಶಾವಳಿ
1ಆದಾಮನ ಸಂತಾನದವರು; ಸೇತ್, ಎನೋಷ್,2ಕೇನಾನ್, ಮಹಲಲೇಲ್, ಯೆರೆದ್,3ಹನೋಕ್, ಮೆತೂಷೆಲಹ, ಲೆಮೆಕ್,4ನೋಹ, ಶೇಮ್, ಹಾಮ್, ಯೆಫೆತ್ ಎಂಬವರು.ಯೆಫೆತರು
5ಯೆಫೆತನ ಸಂತಾನದವರು ಯಾರೆಂದರೆ; ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್ ಎಂಬವರು.6ಗೋಮೆರನ ಸಂತಾನದವರು ಯಾರೆಂದರೆ; ಅಷ್ಕೆನೆಜ್, ರೀಫತ್ ಮತ್ತು ತೋಗರ್ಮ ಎಂಬವರು.7ಯಾವಾನನ ಸಂತಾನದವರು ಯಾರೆಂದರೆ ಎಲೀಷ, ತಾರ್ಷೀಷ್, ಕಿತ್ತೀಮ್, ದೋದಾನೀಮ್ ಎಂಬ ಸ್ಥಳಗಳವರು.ಹಾಮನ್ಯರು
8ಹಾಮಾನ ಸಂತಾನದವರು ಯಾರೆಂದರೆ ಕೂಷ್, ಮಿಚ್ರಯಿಮ್, ಪೂಟ್, ಕಾನಾನ್ ಎಂಬವರು.9ಕೂಷನ ಸಂತಾನದವರು: ಸೆಬಾ, ಹವೀಲ, ಸಬ್ತ, ರಮ್ಮ ಸಬ್ತೆಕ ಎಂಬುವರು. ರಮ್ಮನ ಸಂತಾನದವರು: ಶೆಬ ಮತ್ತು ದೆದಾನ್ ಎಂಬವರು.10ಕೂಷನು ನಿಮ್ರೋದನನ್ನು ಪಡೆದನು. ಇವನು ಈ ಭೂಮಿಯ ಮೇಲಿನ ಪ್ರಥಮ ಪರಾಕ್ರಮಶಾಲಿ ರಾಜನೆಂದು ಪ್ರಸಿದ್ಧನಾದನು.11ಮಿಚ್ರಯಿಮ್ಯರಿಂದ ಲೂದ್ಯರೂ, ಅನಾಮ್ಯರೂ, ಲೆಹಾಬ್ಯರೂ, ನಫ್ತುಹ್ಯರೂ,12ಪತ್ರುಸ್ಯರೂ, ಕಸ್ಲುಹ್ಯರೂ, ಕಫ್ತೋರ್ಯರೂ ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದರು.13ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ನಂತರ ಹೇತ್ ಎಂಬವನು ಹುಟ್ಟಿದನು.14ಇದಲ್ಲದೆ ಯೆಬೂಸಿಯರೂ, ಅಮೋರಿಯರೂ, ಗಿರ್ಗಾಷಿಯರೂ,15ಹಿವ್ವಿಯರೂ, ಅರ್ಕಿಯರೂ, ಸೀನಿಯರೂ,16ಅರ್ವಾದಿಯರೂ, ಚೆಮಾರಿಯರೂ ಮತ್ತು ಹಮಾತಿಯರೂ ಕಾನಾನನಿಂದ ಹುಟ್ಟಿದವರು.ಶೇಮನ ವಂಶಾವಳಿ
17ಶೇಮನ ಸಂತಾನದವರು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್, ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್ ಎಂಬುವರು.18ಅರ್ಪಕ್ಷದನಿಂದ ಶೆಲಹನೂ ಮತ್ತು ಶೆಳಹನಿಂದ ಏಬೆರನೂ ಹುಟ್ಟಿದನು.19ಏಬೆರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗ್ (ವಿಂಗಡನೆ) ಎಂಬ ಹೆಸರು. ಇವನ ಕಾಲದಲ್ಲಿ ಭೂಮಿಯ ಜನರು ವಿಂಗಡಿಸಲ್ಪಟ್ಟರು. ಇವನ ತಮ್ಮನ ಹೆಸರು ಯೊಕ್ತಾನ್.20ಯೋಕ್ತಾನನ ಸಂತಾನದವರು: ಅಲ್ಮೋದಾದ್, ಶೆಲೆಫ್, ಹಚರ್ಮಾವೆತ್, ಯೆರಹ,21ಹದೋರಾಮ್, ಊಜಾಲ್, ದಿಕ್ಲ,22ಎಬಾಲ್, ಅಬೀಮಾಯೇಲ್, ಶೆಬಾ,23ಓಫೀರ್, ಹವೀಲಾ ಮತ್ತು ಯೋಬಾಬ್ ಎಂಬುವರು.24ಶೇಮನ ಸಂತಾನದವರು: ಅರ್ಪಕ್ಷದ್, ಶೆಲಹ,25ಏಬೆರ್, ಪೆಲೆಗ್, ರೆಯೂ,26ಸೆರೂಗ್, ನಾಹೋರ್, ತೆರಹ,27ಅಬ್ರಾಮ್ ಎಂಬ ಹೆಸರು ಹೊಂದಿದ ಅಬ್ರಹಾಮ ಎಂಬುವರು.ಅಬ್ರಹಾಮನ ವಂಶಾವಳಿ
28ಅಬ್ರಹಾಮನ ಮಕ್ಕಳು: ಇಸಾಕ ಮತ್ತು ಇಷ್ಮಾಯೇಲ್.29ಇಷ್ಮಾಯೇಲರ ವಂಶಾವಳಿ: ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬೆಯೇಲ್, ಮಿಬ್ಸಾಮ್,30ಮಿಷ್ಮ, ದೂಮಾ, ಮಸ್ಸ, ಹದದ್, ತೇಮ,31ಯೆಟೂರ್, ನಾಫೀಷ್ ಮತ್ತು ಕೇದೆಮ್ ಎಂಬುವರು.32ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಸಂತಾನದವರು: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ ಎಂಬವರು. ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರನ್ನು ಪಡೆದನು.33ಏಫ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬವರು ಮಿದ್ಯಾನನಿಂದ ಹುಟ್ಟಿದವರು. ಇವರೆಲ್ಲರೂ ಕೆಟೂರಳ ಸಂತತಿಯವರು.34ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಏಸಾವ ಮತ್ತು ಇಸ್ರಾಯೇಲ್ ಇಸಾಕನ ಮಕ್ಕಳು.ಏಸಾವನ ವಂಶಜರು
35ಏಸಾವನ ವಂಶಸ್ಥರು ಯಾರೆಂದರೆ ಎಲೀಫಜ್, ರೆಯೂವೇಲ್, ಯೆಯೂಷ್, ಯಳಾಮ್ ಮತ್ತು ಕೋರಹ ಇವರೇ.36ಎಲೀಫಜನ ಮಕ್ಕಳು: ತೇಮಾನ್, ಓಮಾರ್, ಜೆಫೀ, ಗತಾಮ್, ಕೆನಜ್; ತಿಮ್ನ ಮತ್ತು ಅಮಾಲೇಕ್ ಎಂಬವರು.37ರೆಯೂವೇಲನ ಮಕ್ಕಳು: ನಹತ್, ಜೆರಹ, ಶಮ್ಮ ಮತ್ತು ಮಿಜ್ಜ.ಎದೋಮಿನ ಮೂಲನಿವಾಸಿಗಳು
38ಸೇಯೀರನಿಂದ ಹುಟ್ಟಿದವರು ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್ ಮತ್ತು ದೀಶಾನ್ ಸೇಯೀರನ ಮಕ್ಕಳು.39ಲೋಟಾನನ ಮಕ್ಕಳು ಹೋರೀ ಮತ್ತು ಹೋಮಾಮ್. ಲೋಟಾನನ ತಂಗಿ ತಿಮ್ನ.40ಶೋಬಾಲನ ಮಕ್ಕಳು ಅಲ್ಯಾನ್, ಮಾನಹತ್, ಏಬಾಲ್, ಶೆಫೀ ಮತ್ತು ಓನಾಮ್. ಚಿಬ್ಬೋನನ ಮಕ್ಕಳು ಅಯ್ಯಾಹ ಮತ್ತು ಅನಾಹ.41ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.42ಏಚೆರನ ಮಕ್ಕಳು ಬಿಲ್ಹಾನ್, ಜಾವಾನ್ ಮತ್ತು ಯಾಕಾನ್. ದೀಶಾನನ ಮಕ್ಕಳು ಊಚ್ ಮತ್ತು ಅರಾನ್.ಎದೋಮಿನಲ್ಲಿ ಆಳುತ್ತಿದ್ದ ಅರಸರು
43ಇಸ್ರಾಯೇಲರ ಅರಸರು ಆಳ್ವಿಕೆ ಮಾಡುವುದಕ್ಕಿಂತ ಮೊದಲು ಎದೋಮ್ ದೇಶದಲ್ಲಿ ಅರಸರು ಆಳುತ್ತಿದ್ದರು. ಇವರಲ್ಲಿ ಬೆಯೋರನ ಮಗನಾದ ಬೆಳನು ಮೊದಲನೆಯವನು. ಅವನ ರಾಜಧಾನಿ ಹೆಸರು ದಿನ್ಹಾಬಾ.44ಬೆಳನು ಸತ್ತ ನಂತರ ಬೊಚ್ರದವನಾದ ಜೆರಹನ ಮಗ ಯೋಬಾಬನು ಅಧಿಪತ್ಯಕ್ಕೆ ಬಂದನು.45ಯೋಬಾಬನು ಸತ್ತ ಮೇಲೆ ತೇಮಾನೀಯರ ದೇಶದವನಾದ ಹುಷಾಮನು ಆಳ್ವಿಕೆ ಮಾಡಿದನು.46ಹುಷಾಮನು ಸತ್ತ ಮೇಲೆ ಮೋವಾಬ್ಯರ ಬೈಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.47ಹದದನು ಸತ್ತ ಮೇಲೆ ಮಸ್ರೇಕದವನಾದ ಸಮ್ಲಾಹನು ಪಟ್ಟಕ್ಕೆ ಬಂದನು.48ಸಮ್ಲಾಹನು ಸತ್ತ ಮೇಲೆ ಯೂಫ್ರೆಟಿಸ್ ನದಿ ತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು.49ಸೌಲನು ಸತ್ತ ಮೇಲೆ ಅಕ್ಬೋರನ ಮಗನಾದ ಬಾಳ್ಹಾನಾನು ಅರಸನಾದನು.50ಬಾಳ್ಹಾನಾನ್ ಸತ್ತ ಮೇಲೆ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೇದಳ ಮಗಳು,51ಹದದನು ಸತ್ತ ನಂತರ ಎದೋಮ್ಯ ಕುಲಪತಿಗಳಾದವರು ಯಾರೆಂದರೆ, ತಿಮ್ನ, ಅಲ್ಯ, ಯೆತೇತ್,52ಒಹೋಲಿಬಾಮ, ಏಲ, ಪೀನೋನ್,53ಕೆನೆಜ್, ತೇಮಾನ್, ಮಿಬ್ಚಾರ್,54ಮಗ್ದೀಯೇಲ್ ಮತ್ತು ಇರಾಮ್ ಇವರೇ.
2ಇಸ್ರಾಯೇಲನ ಮಕ್ಕಳು
1ಇಸ್ರಾಯೇಲನ ಮಕ್ಕಳು ಯಾರೆಂದರೆ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,2ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.3ಯೆಹೂದನಿಗೆ ಏರ್, ಓನಾನ್ ಮತ್ತು ಶೇಲಾಹ ಎಂಬ ಮೂರು ಜನರು ಮಕ್ಕಳು ಶೂನನ ಮಗಳಾದ ಕಾನಾನಳಿಂದ ಹುಟ್ಟಿದರು. ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ಚಿತ್ತಕ್ಕೆ ವಿರೋಧವಾಗಿ ನಡೆದುಕೊಂಡದ್ದರಿಂದ ಯೆಹೋವನು ಅವನನ್ನು ಕೊಂದು ಹಾಕಿದನು.4ಯೆಹೂದನ ಸೊಸೆಯಾದ ತಾಮಾರಳು ಅವನಿಂದ ಪೆರೆಚ್ ಮತ್ತು ಜೆರಹ ಎಂಬವರನ್ನು ಹೆತ್ತಳು.5ಯೆಹೂದನಿಗೆ ಐದು ಮಕ್ಕಳು. ಪೆರೆಚನ ಮಕ್ಕಳು ಹೆಚ್ರೋನ್ ಮತ್ತು ಹಮೂಲ್.6ಜೆರಹನ ಐದು ಮಕ್ಕಳು ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ.7ಯೆಹೋವನಿಗೆ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ ಆಕಾರನು ಕರ್ಮೀಯನ ಮಗನು.8ಏತಾನನ ಮಗನು ಅಜರ್ಯನು.9ಹೆಚ್ರೋನನ ಮಕ್ಕಳು ಯೆರಹ್ಮೇಲನು, ರಾಮ್ ಮತ್ತು ಕೆಲೂಬಾಯ್ ಎಂಬುವರು.ರಾಮನ ವಂಶಾವಳಿ ಮತ್ತು ದಾವೀದನ ಪೂರ್ವಜರು
10ರಾಮನು ಅಮ್ಮೀನಾದಾಬನನ್ನು ಪಡೆದನು; ಅಮ್ಮಿನಾದಾಬನು ಯೆಹೂದ ಕುಲದ ಪ್ರಭುವಾದ ನಹಶೋನನ್ನು ಪಡೆದನು.11ನಹಶೋನನು ಸಲ್ಮನನ್ನು ಪಡೆದನು; ಸಲ್ಮನು ಬೋವಜನನ್ನು ಪಡೆದನು.12ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.13ಇಷಯನ ಚೊಚ್ಚಲ ಮಗನು ಎಲೀಯಾಬ್, ಎರಡನೆಯ ಮಗ ಅಬೀನಾದಾಬ್,14ಮೂರನೆಯವನು ಶಿಮ್ಮ, ನಾಲ್ಕನೆಯವನು ನೆತನೇಲ್, ಐದನೆಯವನು ರದ್ದೈ.15ಆರನೆಯವನು ಓಚೆಮ್, ಏಳನೆಯವನು ದಾವೀದ್.16ಚೆರೂಯ ಮತ್ತು ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ ಮತ್ತು ಅಸಾಹೇಲ್ ಎಂಬವರು ಚೆರೂಯಳ ಮಕ್ಕಳು.17ಅಬೀಗೈಲಳು ಅಮಾಸನ ತಾಯಿ. ಇಷ್ಮಾಯೇಲನಾದ ಯೆತೆರ್ ಎಂಬವನು ಅವನ ತಂದೆ.ಕಾಲೇಬನ ವಂಶಾವಳಿ
18ಹೆಚ್ರೋನನ ಮಗ ಕಾಲೇಬ. ಇವನು ತನ್ನ ಹೆಂಡತಿ ಅಜೂಬಳಿಂದಲೂ ಮತ್ತು ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಆಕೆಯಲ್ಲಿ ಅವನಿಗೆ ಹುಟ್ಟಿದ ಮಕ್ಕಳು ಯೇಷೆರ್, ಶೋಬಾಬ್ ಮತ್ತು ಅರ್ದೋನ್ ಎಂಬವರು.19ಅಜೂಬಳು ಸತ್ತ ಮೇಲೆ ಕಾಲೇಬನು ಎಫ್ರಾತಳನ್ನು ಮದುವೆಮಾಡಿಕೊಂಡನು. ಆಕೆಯಲ್ಲಿ ಅವನಿಗೆ ಹೂರನು ಹುಟ್ಟಿದನು.20ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲನನ್ನು ಪಡೆದನು.21ಹೆಚ್ರೋನನು ಅರವತ್ತು ವರ್ಷದವನಾದಾಗ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಮಗಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಂದ ಸೆಗೂಬನನ್ನು ಪಡೆದಳು.22ಸೆಗೂಬನು ಯಾಯೀರನನ್ನು ಪಡೆದನು; ಇವನಿಗೆ ಗಿಲ್ಯಾದ್ ದೇಶದಲ್ಲಿ ಇಪ್ಪತ್ತ್ಮೂರು ಪಟ್ಟಣಗಳು ಇದ್ದವು.23ಗೆಷೂರ್ಯರು ಮತ್ತು ಅರಾಮ್ಯರು ಯಾಯೀರನ ಸಂತಾನದವರಿಂದ ಯಾಯೀರಿನ ಗ್ರಾಮಗಳನ್ನೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನು, ಒಟ್ಟು ಅರವತ್ತು ಸಂಸ್ಥಾನಗಳನ್ನು ಗೆದ್ದುಕೊಂಡರು. ಈ ಸಂಸ್ಥಾನದವರೆಲ್ಲರೂ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಗೋತ್ರದವರು.24ಹೆಚ್ರೋನನು ಕಾಲೇಬನ ಎಫ್ರಾತದಲ್ಲಿ ಮರಣಹೊಂದಿದ ನಂತರ ಅವನ ಹೆಂಡತಿಯಾದ ಅಬೀಯ ಎಂಬಾಕೆಯು ಅಷ್ಹೂರನನ್ನು ಹೆತ್ತಳು. ಇವನು ತೆಕೋವದವರ ಮೂಲಪುರುಷನು.ಯೆರಹ್ಮೇಲನ ವಂಶಾವಳಿ
25ಹೆಚ್ರೋನನ ಚೊಚ್ಚಲಮಗನಾದ ಯೆರಹ್ಮೇಲನಿಗೆ ಐದು ಮಕ್ಕಳು: ರಾಮ್ ಚೊಚ್ಚಲು ಮಗನು ಹಾಗೆಯೇ ಬೂನ, ಓರೆನ್, ಓಚೆಮ್, ಅಹೀಯ ಎಂಬುವರು ಅನಂತರ ಹುಟ್ಟಿದವರು.26ಯೆರಹ್ಮೇಲನಿಗೆ ಅಟಾರ ಎಂಬ ಇನ್ನೊಬ್ಬ ಹೆಂಡತಿಯಿದ್ದಳು. ಈಕೆಯು ಓನಾಮನ ತಾಯಿ.27ಯೆರಹ್ಮೇಲನ ಚೊಚ್ಚಲ ಮಗನಾದ ರಾಮನ ಮಕ್ಕಳು ಮಾಚ್, ಯಾಮೀನ್ ಮತ್ತು ಏಕೆರ್ ಇವರೇ.28ಓನಾಮನ ಮಕ್ಕಳು ಶಮ್ಮೈ ಮತ್ತು ಯಾದ ಎಂಬುವವರು. ಶಮ್ಮೈನ ಮಕ್ಕಳು ನಾದಾಬ್ ಮತ್ತು ಅಬಿಷೂರ್.29ಅಬಿಷೂರನ ಹೆಂಡತಿಯ ಹೆಸರು ಅಬೀಹೈಲ್. ಈಕೆಯಲ್ಲಿ ಅಹ್ಬಾನ್ ಮತ್ತು ಮೊಲೀದ್ ಎಂಬುವವರು ಹುಟ್ಟಿದರು.30ನಾದಾಬನ ಮಕ್ಕಳು ಸೆಲೆದ್ ಮತ್ತು ಅಪ್ಪಯಿಮ್ ಎಂಬುವವರು. ಸೇಲೆದನು ಮಕ್ಕಳಿಲ್ಲದೆ ಸತ್ತುಹೋದನು.31ಅಪ್ಪಯಿಮನ ಮಗ ಇಷ್ಷೀ. ಇಷ್ಷೀಯನ ಮಗ ಶೇಷಾನ್. ಶೇಷಾನನ ಮಗ ಅಹ್ಲೈ.32ಶಮ್ಮೈಯ ತಮ್ಮನಾದ ಯಾದನ ಮಕ್ಕಳು ಯೆತೆರ್ ಮತ್ತು ಯೋನಾತಾನ್ ಇವರೇ. ಯೆತೆರನು ಮಕ್ಕಳಿಲ್ಲದೆ ಸತ್ತನು.33ಯೋನಾತಾನನ ಮಕ್ಕಳು ಪೆಲೆತ್ ಮತ್ತು ಜಾಜ ಎಂಬುವವರು. ಇವರೆಲ್ಲರೂ ಯೆರಹ್ಮೇಲನ ಸಂತಾನದವರು.34ಶೇಷಾನನಿಗೆ ಹೆಣ್ಣು ಮಕ್ಕಳಿದ್ದರೇ ಹೊರತು ಗಂಡು ಮಕ್ಕಳಿರಲಿಲ್ಲ. ಇದಲ್ಲದೆ ಅವನಿಗೆ ಯರ್ಹನೆಂಬ ಒಬ್ಬ ಐಗುಪ್ತ ಸೇವಕನಿದ್ದನು.35ಶೇಷಾನನು ತನ್ನ ಮಗಳನ್ನು ಸೇವಕನಾದ ಯರ್ಹನಿಗೆ ಮದುವೆಮಾಡಿಕೊಟ್ಟನು. ಆಕೆಯು ಅವನಿಂದ ಅತ್ತೈಯನ್ನು ಹೆತ್ತಳು.36ಅತ್ತೈ ನಾತಾನನನ್ನು ಪಡೆದನು; ನಾತಾನನು ಜಾಬಾದನನ್ನು ಪಡೆದನು.37ಜಾಬಾದನು ಎಫ್ಲಾಲನನ್ನು ಪಡೆದನು; ಎಫ್ಲಾಲನು ಓಬೇದನನ್ನು ಪಡೆದನು.38ಓಬೇದನು ಯೇಹೂವನ್ನು ಪಡೆದನು; ಯೇಹೂವು ಅಜರ್ಯನನ್ನು ಪಡೆದನು.39ಅಜರ್ಯನು ಹೆಲೆಚನನ್ನು ಪಡೆದನು; ಹೆಲೆಚನು ಎಲ್ಲಾಸನನ್ನು ಪಡೆದನು.40ಎಲ್ಲಾಸನು ಸಿಸ್ಮೈಯನ್ನು ಪಡೆದನು; ಸಿಸ್ಮೈಯು ಶಲ್ಲೂಮನನ್ನು ಪಡೆದನು.41ಶಲ್ಲೂಮನು ಯೆಕಮ್ಯಾಹನನ್ನು ಪಡೆದನು; ಯೆಕಮ್ಯಾಹನನು ಎಲೀಷಾಮನನ್ನು ಪಡೆದನು.ಕಾಲೇಬನ ಗೋತ್ರಗಳು
42ಯೆರಹೇಲ್ಮನ ಸಹೋದರನಾದ ಕಾಲೇಬನ ಸಂತಾನದವರು: ಚೊಚ್ಚಲನು ಜೀಫ್ಯರ ಮೂಲಪುರುಷನಾದ ಮೇಷನು, ಎರಡನೆಯವನು ಮಾರೇಷನು.43ಮಾರೇಷನು ಹೆಬ್ರೋನ್ಯರ ಮೂಲಪುರುಷನು. ಹೆಬ್ರೋನ್ಯರ ಮಕ್ಕಳು ಕೋರಹ, ತಪ್ಪೂಹ, ರೆಕೆಮ್ ಮತ್ತು ಶೆಮ.44ಶೆಮ್ಯರಿಂದ ರಹಮ್ಯರು, ರಹಮ್ಯರಿಂದ ಯೊರ್ಕೆಯಾಮ್ಯರು ಹುಟ್ಟಿದರು.45ರೆಕೆಮನು ಶಮ್ಮೈನನ್ನು ಪಡೆದನು. ಶಮ್ಮೈನಿಂದ ಮವೋನ್ಯರು, ಮವೋನ್ಯರಿಂದ ಬೇತ್‌ಚೂರಿನವರು ಹುಟ್ಟಿದರು.46ಕಾಲೇಬನ ಉಪಪತ್ನಿಯಾದ ಏಫಳಲ್ಲಿ ಹಾರಾನ್, ಮೋಚ ಮತ್ತು ಗಾಜೇಜ್ ಎಂಬುವವರು ಹುಟ್ಟಿದರು.47ಹಾರಾನನು ಗಾಜೇಜನನ್ನು ಪಡೆದನು. ಯಾದೈಯಳಲ್ಲಿ ರೆಗೆಮ್, ಯೋತಾಮ್, ಗೇಷಾನ್, ಪೆಲೆಟ್, ಏಫ ಮತ್ತು ಶಾಫ್ ಎಂಬುವವರು ಹುಟ್ಟಿದರು.48ಕಾಲೇಬನ ಉಪಪತ್ನಿಯಾದ ಮಾಕಳಲ್ಲಿ ಶೆಬೆರ್ ಮತ್ತು ತಿರ್ಹನ್ ಎಂಬುವವರು ಹುಟ್ಟಿದರು.49ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್; ಮಕ್ಬೇನಾ ಮತ್ತು ಗಿಬ್ಯ ಪಟ್ಟಣದವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಷಾ.50ಕಾಲೇಬನ ಹೆಂಡತಿಯಾದ ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಕ್ಕಳು ಕಿರ್ಯತ್ಯಾರೀಮರ ಮೂಲಪುರುಷನಾದ ಶೋಬಾಲ್,51ಬೇತ್ಲೆಹೇಮ್ಯರ ಮೂಲಪುರುಷನಾದ ಸಲ್ಮ ಮತ್ತು ಬೇತ್ಗಾದೇರಿನ ಮೂಲಪುರುಷನಾದ ಹಾರೇಫ್.52ಕಿರ್ಯತ್ಯಾರೀಮಿನ ಮೂಲಪುರುಷನಾದ ಶೋಬಾಲನ ಸಂತಾನದವರು ಹಾರೋಯೆ, ಮಾನಹತಿಯರ ಅರ್ಧ ಜನರು,53ಕಿರ್ಯತ್ಯಾರೀಮ್ ಕುಟುಂಬಗಳವರು, ಯೆತೆರಿನವರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು ಇವರೇ. ಇವರಿಂದ ಹುಟ್ಟಿದ ಜನಾಂಗ ಚೊರ್ರಾತ್ಯರೂ ಮತ್ತು ಎಷ್ಟಾವೋಲ್ಯರೂ.54ಸಲ್ಮನಿಂದ ಬೇತ್ಲೆಹೇಮ್, ನೆಟೋಫಾ, ಅಟರೋತ್, ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಹುಟ್ಟಿದರು.55ಯಾಬೇಚಿನಲ್ಲಿ ವಾಸಿಸುವ ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ಬರೆಯುವುದರಲ್ಲೂ ಮತ್ತು ಪ್ರತಿಗಳನ್ನು ಮಾಡುವುದರಲ್ಲೂ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು ಮತ್ತು ಸೂಕಾತ್ಯರು, ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮತನಿಂದ ಹುಟ್ಟಿದ ಕೇನ್ಯರು.
3ದಾವೀದನ ವಂಶಾವಳಿ
1ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು: ಚೊಚ್ಚಲಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು, ಇವನು ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದವನು.2ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.3ಐದನೆಯವನು ಶೆಫಟ್ಯ, ಇವನು ಅಬೀಟಲಳ ಮಗನು. ಆರನೆಯವನು ಇತ್ರಾಮ್. ಇವನು ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದವನು.4ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಆರು ಜನರು ಮಕ್ಕಳು ಹುಟ್ಟಿದರು. ಅಲ್ಲಿ ಅವನು ಏಳು ವರ್ಷ ಆರು ತಿಂಗಳು ಆಡಳಿತ ನಡೆಸಿದನು ಮತ್ತು ಯೆರೂಸಲೇಮನ್ನು ಮೂವತ್ತಮೂರು ವರ್ಷ ಆಳಿದನು.5ಯೆರೂಸಲೇಮಿನಲ್ಲಿರುವಾಗ ಅವನಿಗೆ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಮಕ್ಕಳು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು.6ಇದಲ್ಲದೆ ಇಬ್ಹಾರ್, ಎಲೀಷಾಮ್, ಎಲೀಫೆಲೆಟ್,7ನೋಗ, ನೆಫೆಗ್, ಯಾಫೀಯ,8ಎಲೀಷಾಮ್, ಎಲ್ಯಾದ್, ಎಲೀಫೆಲೆಟ್ ಎಂಬ ಒಂಬತ್ತು ಮಕ್ಕಳು ಅವನಿಗೆ ಅಲ್ಲಿಯೇ ಹುಟ್ಟಿದರು.9ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು.ಸೊಲೊಮೋನನ ವಂಶಜರು
10ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ;11ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಯನು, ಅಹಜ್ಯನ ಮಗ ಯೋವಾಷನು.12ಯೋವಾಷನ ಮಗ ಅಮಚ್ಯ. ಅಮಚ್ಯ ಮಗ ಅಜರ್ಯ; ಅಜರ್ಯನ ಮಗ ಯೋತಾಮ್.13ಯೋತಾಮನ ಮಗ ಆಹಾಜ; ಆಹಾಜನ ಮಗ ಹಿಜ್ಕೀಯನು. ಹಿಜ್ಕೀಯನ ಮಗ ಮನಸ್ಸೆಯು.14ಮನಸ್ಸೆಯ ಮಗ ಆಮೋನ್; ಆಮೋನನ ಮಗ ಯೋಷೀಯ.15ಯೋಷೀಯನ ಮಕ್ಕಳು: ಚೊಚ್ಚಲ ಮಗ ಯೋಹಾನಾನ್, ಎರಡನೆಯವನು ಯೆಹೋಯಾಕೀಮ್, ಮೂರನೆಯವನು ಚಿದ್ಕೀಯ, ನಾಲ್ಕನೆಯವನು ಶಲ್ಲೂಮ್.16ಯೆಹೋಯಾಕೀಮನ ಮಗ ಯೆಕೊನ್ಯನು; ಯೆಕೊನ್ಯನ ಮಗ ಚಿದ್ಕೀಯನು.ಯೆಹೋಯಾಕೀಮನ ವಂಶಜರು
17ಬಾಬಿಲೋನಿಯರಿಂದ ಸೆರೆಗೆ ಒಯ್ಯಲ್ಪಟ್ಟ ಯೆಕೊನ್ಯನಿಗೆ ಹುಟ್ಟಿದ ಮಕ್ಕಳು ಶೆಯಲ್ತೀಯೇಲ್,18ಮಲ್ಕೀರಾಮ್, ಪೆದಾಯ್, ಶೆನಚ್ಚರ್, ಯೆಕಮ್ಯ, ಹೋಷಾಮ್ ಮತ್ತು ನೆದಬ್ಯ ಎಂಬ ಏಳು ಗಂಡುಮಕ್ಕಳು.19ಪೆದಾಯನ ಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತ್ ಎಂಬ ಮಗಳೂ ಇದ್ದಳು.20ಇವರಲ್ಲದೆ ಪೆದಾಯನಿಗೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ ಹೆಸೆದ್ ಎಂಬ ಐದು ಗಂಡು ಮಕ್ಕಳಿದ್ದರು.21ಹನನ್ಯನ ಸಂತಾನದವರು: ಪೆಲಟ್ಯ, ಯೆಶಾಯ ಮತ್ತು ರೆಫಾಯನ ಮಕ್ಕಳಾದ ಅರ್ನಾನ್, ಓಬದ್ಯ ಮತ್ತು ಶೇಕನ್ಯ.22ಶೆಕನ್ಯನ ಮಗ ಶೆಮಾಯ. ಶೆಮಾಯನಿಗೆ ಆರು ಗಂಡು ಮಕ್ಕಳು: ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್.23ನೆಯರ್ಯನ ಮೂರು ಗಂಡು ಮಕ್ಕಳು: ಎಲ್ಯೋಗೆನೈ, ಹಿಜ್ಕೀಯ ಮತ್ತು ಅಜ್ರೀಕಾಮ್.24ಎಲ್ಯೋಗೆನೈಯನ ಏಳು ಗಂಡು ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ.
4ಯೆಹೂದನ ವಂಶಾವಳಿ
1ಯೆಹೂದನ ಸಂತಾನದವರು: ಪೆರೆಚ್, ಹೆಚ್ರೋನ್, ಕರ್ಮೀ, ಹೂರ್ ಮತ್ತು ಶೋಬಾಲ್.2ಶೋಬಾಲನ ಮಗನಾದ ರೆವಾಯನು ಯಹತನನ್ನು ಪಡೆದನು. ಯಹತನು ಅಹೂಮೈ ಮತ್ತು ಲಹದ್ ಇವರನ್ನು ಪಡೆದನು. ಇವರು ಚೊರ್ರದ ಕುಟುಂಬದವರು.3ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್ ಇವರು ಎಟಾಮಿನವರ ಮೂಲಪುರುಷರು. ಹಚೆಲೆಲ್‌ಪೋನೀ ಎಂಬವಳು ಇವರ ತಂಗಿ.4ಗೆದೋರಿನ ಮೂಲಪುರುಷನು ಪೆನೂವೇಲನು. ಹೂಷಾಹ್ಯರ ಮೂಲಪುರುಷನು ಏಜೆರ್. ಇವರು ಎಫ್ರಾತಾಹಳ ಚೊಚ್ಚಲ ಮಗನಾದ ಹೂರನ ಮಕ್ಕಳು. ಈ ಹೂರನೇ ಬೇತ್ಲೆಹೇಮ್ಯರ ಮೂಲಪುರುಷನು.5ತೆಕೋವದವರ ಮೂಲಪುರುಷನಾದ ಅಷ್ಹೂರನಿಗೆ ಹೆಲಾಹ ಮತ್ತು ನಾರ ಎಂಬ ಇಬ್ಬರು ಹೆಂಡತಿಯರಿದ್ದರು.6ಅಹುಜ್ಜಾಮ್, ಹೇಫೆರ್ ತೇಮಾನ್ಯರೂ ಮತ್ತು ಅಹಷ್ಟಾರ್ಯರೂ ಎಂಬುವವರು ನಾರಳ ಸಂತಾನದವರು.7ಹೆಲಾಹಳ ಮಕ್ಕಳು: ಚೆರೆತ್ ಇಚ್ಹಾರ್ ಮತ್ತು ಎತ್ನಾನ್ ಎಂಬುವವರು.8ಕೋಚನಿಂದ ಅನೂಬ್ ಮತ್ತು ಚೊಬೇಬ್ ಹುಟ್ಟಿದರು. ಅಹರ‍್ಹೇಲನು ಹಾರುಮನ ಮಗನು. ಕೋಚನು ಇವರ ವಂಶದ ಮೂಲ ಪುರುಷ.9ಯಾಬೇಚನು ತನ್ನ ಅಣ್ಣತಮ್ಮಂದಿರಲ್ಲಿ ಗೌರವವುಳ್ಳವನಾಗಿದ್ದನು. ಇವನನ್ನು ಬಹು ವೇದನೆಯಿಂದ ಹೆತ್ತೆನೆಂದು ಇವನ ತಾಯಿ ಇವನಿಗೆ ಯಾಬೇಚನೆಂದು ಹೆಸರಿಟ್ಟಳು.10ಯಾಬೇಚನು ಇಸ್ರಾಯೇಲಿನ ದೇವರಿಗೆ, <<ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?>> ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.11ಶೂಹನ ಸಹೋದರನಾದ ಕೆಲೂಬನು ಮೆಹೀರನನ್ನು ಪಡೆದನು. ಮೆಹೀರನು ಎಷ್ಟೋನನ ತಂದೆ.12ಎಷ್ಟೋನನಿಂದ ಬೇತ್ರಾಫ, ಪಾಸೇಹ, ತೆಹಿನ್ನ ಎಂಬ ಮೂರು ಗಂಡು ಮಕ್ಕಳಿದ್ದರು. ಇವರು ರೇಕಾಹ್ಯರು. ತೆಹಿನ್ನನು ನಾಹಷ್ ಪಟ್ಟಣದವರ ಮೂಲಪುರುಷನು.13ಕೆನಜನ ಮಕ್ಕಳು ಒತ್ನೀಯೇಲ್ ಮತ್ತು ಸೆರಾಯ ಎಂಬುವವರು. ಒತ್ನೀಯೇಲನ ಮಕ್ಕಳು ಹತತ್ ಮತ್ತು ಮೆಯೋನೋತೈ.14ಮೆಯೋನೊತೈಯು ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗಳಾದ ಗೇಹರಾಷೀಮ್ಯರ ಮೂಲಪುರುಷನಾದ ಯೋವಾಬನನ್ನು ಪಡೆದನು.15ಯೆಫುನ್ನೆಯ ಮಗನಾದ ಕಾಲೇಬನ ಸಂತಾನದವರು ಈರು, ಏಲಹ್ ಮತ್ತು ನಾಮ್. ಏಲನ ಮಗನಾದ ಕೆನಜ್.16ಯೆಹಲ್ಲೆಲೇಲನ ಮಕ್ಕಳು: ಜೀಫ್, ಜೀಫಾ, ತೀರ್ಯ ಮತ್ತು ಅಸರೇಲ್ ಎಂಬುವವರು.17ಎಜ್ರನ ಮಕ್ಕಳು: ಯೆತೆರ್, ಮೆರೆದ್, ಏಫೆರ್ ಮತ್ತು ಯಾಲೋನ್ ಎಂಬುವವರು. ಮೆರೆದನು ಫರೋಹನ ಮಗಳಾದ ಬಿತ್ಯೆಳನ್ನು ಮದುವೆಮಾಡಿಕೊಂಡನು. ಈಕೆಯು ಅವನಿಂದ ಗರ್ಭಿಣಿಯಾಗಿ ಮಿರ್ಯಾಮ್, ಶಮ್ಮೈ, ಎಷ್ಟೆಮೋವದವರ ಮೂಲಪುರುಷನಾದ ಇಷ್ಬಹ ಇವರನ್ನು ಹೆತ್ತಳು.18ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿಯು ಗೆದೋರ್ಯರ ಮೂಲಪುರುಷನಾದ ಯೆರೆದ್, ಸೋಕೋವಿನವರ ಮೂಲಪುರುಷನಾದ ಹೆಬೆರ್ ಮತ್ತು ಜಾನೋಹದವರ ಮೂಲಪುರುಷನಾದ ಯೆಕೂತೀಯೇಲ್ ಇವರನ್ನು ಹೆತ್ತಳು.19ನಹಮನ ತಂಗಿಯೂ, ಹೋದೀಯನ ಹೆಂಡತಿಯ ಇಬ್ಬರು ಮಕ್ಕಳಲ್ಲಿ ಒಬ್ಬನು ಗರ್ಮ್ಯದ ಕೆಯೀಲದವರ ಮೂಲಪುರುಷನಾದನು, ಮತ್ತೊಬ್ಬನು ಎಷ್ಟೆಮೋವದವರ ಮಾಕಾತ್ಯ ಸಂತಾನದ ಮೂಲಪುರುಷನಾದನು.20ಶೀಮೋನನ ಮಕ್ಕಳು: ಅಮ್ನೋನ್, ರಿನ್ನ, ಬೆನ್ಹಾನಾನ್ ಮತ್ತು ತೀಲೋನ್. ಇಷ್ಷೀಯನ ಮಕ್ಕಳು: ಜೋಹೇತ್ ಮತ್ತು ಬೆನ್ಜೊಹೇತ್.21ಯೆಹೂದನ ಮಗನಾದ ಶೇಲಹನ ಸಂತಾನದವರು: ಲೇಕಾಹ್ಯರ ಮೂಲಪುರುಷನಾದ ಏರ್, ಮರೇಷದವರ ಮೂಲಪುರುಷನಾದ ಲದ್ದ, ಬೇತಷ್ಬೇಯದಲ್ಲಿರುವ ನೇಯಿಗಾರರ ಕುಟುಂಬಗಳವರು,22ಯೊಕೀಮನು ಕೋಜೇಬದವರು ಮೋವಾಬ್ ದೇಶದಲ್ಲಿ ದೊರೆತನ ನಡಿಸಿ ಬೇತ್ಲೆಹೇಮಿಗೆ ತಿರುಗಿ ಬಂದ ಯೋವಾಷ್ ಮತ್ತು ಸಾರಾಫ್ ಇವರೇ. (ಇವು ಪೂರ್ವಕಾಲದಲ್ಲಿ ನಡೆದ ಸಂಗತಿಗಳು.)23ಮೇಲೆ ಕಂಡ ಜನರು ಕುಂಬಾರರು. ಅವರು ನೆಟಾಯಿಮ್ ಮತ್ತು ಗೆದೇರ ಎಂಬ ಊರುಗಳಲ್ಲಿ ವಾಸಿಸುತ್ತಾ ಅರಸನ ಸೇವೆಯನ್ನು ಮಾಡುತ್ತಿದ್ದರು.ಸಿಮೆಯೋನನ ವಂಶಾವಳಿ
24ಸಿಮೆಯೋನನ ಮಕ್ಕಳು: ನೆಮೂವೇಲ್, ಯಾಮೀನ್, ಯಾರೀಬ್, ಜೆರಹ ಮತ್ತು ಸೌಲ.25ಸೌಲನ ಮಗ ಶಲ್ಲುಮ್. ಇವನ ಮಗ ಮಿಬ್ಸಾಮ್. ಮಿಬ್ಸಾಮನ ಮಗ ಮಿಷ್ಮ.26ಮಿಷ್ಮಾನ ಸಂತಾನದವರು: ಇವನ ಮಗ ಹಮ್ಮೂವೇಲ್, ಇವನ ಮೊಮ್ಮಗ ಜಕ್ಕೂರ್. ಜಕ್ಕೂರನ ಮಗನು ಶಿಮ್ಮೀ.27ಶಿಮ್ಮೀಗೆ ಹದಿನಾರು ಜನರು ಗಂಡು ಮಕ್ಕಳೂ ಮತ್ತು ಆರು ಜನರು ಹೆಣ್ಣು ಮಕ್ಕಳೂ ಇದ್ದರು. ಅವನ ಸಹೋದರರಿಗೆ ಹೆಚ್ಚು ಮಕ್ಕಳಿರಲಿಲ್ಲ. ಆದುದರಿಂದ ಅವರ ಕುಲವು ಯೆಹೂದ ಕುಲದಷ್ಟು ಅಭಿವೃದ್ಧಿಯಾಗಲಿಲ್ಲ.28ದಾವೀದನ ಆಳ್ವಿಕೆಯ ತನಕ ಅವರು ವಾಸವಾಗಿದ್ದ ಪಟ್ಟಣಗಳು ಇವು: ಬೇರ್ಷೆಬ, ಮೋಲಾದ್, ಹಚರ್ ಷೂವಾಲ,29ಬಿಲ್ಹ, ಎಚೆಮ್, ತೋಲಾದ್,30ಬೆತೂವೇಲ್, ಹೊರ್ಮ, ಚಿಕ್ಲಗ್,31ಬೇತ್ ಮರ್ಕಾಬೋತ್, ಹಚರ್ ಸೂಸೀಮ್, ಬೆತ್ ಬಿರೀ ಮತ್ತು ಶಾರಯಿಮ್.32ಇವುಗಳಲ್ಲಿ ಸೇರಿದ ಐದು ಗ್ರಾಮಗಳು ಏಟಾಮ್, ಅಯಿನ್, ರಿಮ್ಮೋನ್, ತೋಕೆನ್ ಮತ್ತು ಆಷಾನ್.33ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲ್ ಊರಿನ ವರೆಗಿರುವ ಗ್ರಾಮಗಳೂ ಅವರ ನಿವಾಸಸ್ಥಾನಗಳಾಗಿದ್ದವು. ಅವರು ವಂಶಾವಳಿಯ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು.34ಮೆಷೋಬಾಬ್, ಯಮ್ಲೇಕ್, ಅಮಚ್ಯನ ಮಗನಾದ ಯೋಷ,35ಯೋವೇಲ್, ಯೊಷಿಬ್ಯನ ಮಗನೂ, ಸೆರಾಯನ ಮೊಮ್ಮಗನೂ, ಅಸಿಯೇಲನ ಮರಿಮಗನೂ ಆಗಿರುವ ಯೇಹೂ,36ಎಲ್ಯೋವೇನೈ, ಯಾಕೋಬ, ಯೆಷೋಹಾಯ, ಅಸಾಯ, ಅದೀಯೇಲ್, ಯೆಸೀಮಿಯೇಲ್, ಬೆನಾಯ ಮತ್ತು37ಶೆಮಾಯನ ಮಗನಾದ ಶಿಮ್ರಿಯಿಂದ ಹುಟ್ಟಿದ ಯೆದಾಯನ ಮರಿಮಗನೂ, ಅಲ್ಲೋನನ ಮೊಮ್ಮಗನೂ, ಶಿಪ್ಫಿಯ ಮಗನು ಆದ ಜೀಜ ಎಂಬ ಹೆಸರುಳ್ಳವರು ತಮ್ಮ ತಮ್ಮ ಗೋತ್ರಗಳಲ್ಲಿ ಪ್ರಮುಖರಾಗಿದ್ದರು.38ಅವರ ಕುಟುಂಬಗಳು ಬೆಳೆಯುತ್ತಾ ಅಭಿವೃದ್ಧಿಯಾದವು.39ಅವರು ತಮ್ಮ ಆಡು, ಕುರಿಗಳಿಗೋಸ್ಕರ ಹುಲ್ಲುಗಾವಲುಗಳನ್ನು ಹುಡುಕುತ್ತಾ ಗೆದೋರಿಗೆ ಹೋಗುವ ಕಣಿವೆಯನ್ನು ದಾಟಿ, ಆಚೆಯ ತಗ್ಗಿನ ಪೂರ್ವದಿಕ್ಕಿಗೆ ಹೋದಾಗ ಅಲ್ಲಿ ಶ್ರೇಷ್ಠವಾದ ಹಸಿರು ಹುಲ್ಲುಗಾವಲುಗಳನ್ನು ಕಂಡರು.40ದೇಶವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದು ಸುಖ ಸಮಾಧಾನಗಳಿಂದ ಕೂಡಿತ್ತು. ಅಲ್ಲಿ ಮೊದಲಿನಿಂದಲೂ ವಾಸವಾಗಿದ್ದವರು ಹಾಮ್ಯರೇ.41ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ ಆ ಹಾಮ್ಯರ ಪಾಳೆಯಗಳನ್ನೂ, ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಗೆದ್ದು, ಎಲ್ಲರನ್ನೂ ನಿರ್ನಾಮಮಾಡಿದರು. ಅವರು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದ್ದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಯಾರೂ ಉಳಿಯಲಿಲ್ಲ.42ಇದಲ್ಲದೆ ಸಿಮೆಯೋನನ ಕುಲದ ಐನೂರು ಜನರು ಸೇಯೀರ್ ಪರ್ವತಕ್ಕೆ ಹೋದರು. ಇಷ್ಷೀಯ ಮಕ್ಕಳಾದ ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್ ಎಂಬುವವರು ಅವರ ಮುಖ್ಯಸ್ಥರು.43ಅವರು ಅಮಾಲೇಕ್ಯರಲ್ಲಿ ಉಳಿದವರನ್ನು ಸಂಹರಿಸಿ ಅಲ್ಲೇ ನೆಲೆಸಿದರು.
5ರೂಬೇನನ ವಂಶಾವಳಿ
1ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.2ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.3ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.4ಯೋವೇಲನ ವಂಶಾವಳಿ: ಇವನ ಮಗ ಶೆಮಾಯ; ಶೆಮಾಯನ ಮಗ ಗೋಗ್.5ಗೋಗನ ಮಗ ಶಿಮ್ಮೀ; ಇವನ ಮಗ ಮೀಕ. ಮೀಕನ ಮಗ ರೆವಾಯ, ಇವನ ಮಗ ಬಾಳ್.6ಬಾಳನ ಮಗ ಬೇರ. ರೂಬೇನ್ಯರ ಪ್ರಭುಗಳಲ್ಲೊಬ್ಬನಾಗಿದ್ದ ಇವನನ್ನು ಅಶ್ಶೂರದ ಅರಸನಾದ ತಿಗ್ಲತ್ ಫಿಲ್ನೇಸರನು ಸೆರೆಯೊಯ್ದನು.7ವಂಶಾವಳಿಯ ಪಟ್ಟಿಯಲ್ಲಿ ಇವನ ಗೋತ್ರ ಸಂಬಂಧಿಗಳಾಗಿ ಲಿಖಿತರಾದವರು ನಾಯಕನಾದ ಯೆಗೀಯೇಲ್, ಜೆಕರ್ಯ, ಬೆಳ ಇವರೇ. ಬೆಳನು ಅಜಾಜನ ಮಗ.8ಬೆಳನು ಅಜಾಜನ ಮಗ. ಅಜಾಜನು ಶೆಮಯನ ಮಗ. ಶೆಮಯನು ಯೋವೇಲನ ಮಗ. ಯೋವೇಲ್ಯರು ಅರೋಯೇರಿನಿಂದ ನೆಬೋ ಮತ್ತು ಬಾಳ್ಮೆಯೋನ್ ಎಂಬ ಸ್ಥಳಗಳವರೆಗೂ ವಾಸಿಸುತ್ತಿದ್ದರು.9ಪೂರ್ವ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಈಚೆಯಲ್ಲಿರುವ ಅರಣ್ಯವು ಇವರ ಮೇರೆ. ಇವರಿಗೆ ಗಿಲ್ಯಾದ್ ದೇಶದಲ್ಲಿ ಅನೇಕ ದನ ಕುರಿಹಿಂಡುಗಳಿದ್ದವು.10ಇವರು ಸೌಲನ ಕಾಲದಲ್ಲಿ ಹಗ್ರೀಯರೊಡನೆ ಯುದ್ಧಮಾಡಿ, ಅವರನ್ನು ಸಂಹರಿಸಿ, ಗಿಲ್ಯಾದಿನ ಪೂರ್ವದಿಕ್ಕಿನ ಪ್ರಾಂತ್ಯಗಳಲ್ಲಿದ್ದ ಅವರ ಡೇರೆಗಳಲ್ಲಿ ವಾಸಮಾಡ ತೊಡಗಿದನು.ಗಾದನ ವಂಶಾವಳಿ
11ರೂಬೇನ್ಯರ ಎದುರಿನಲ್ಲಿ ಬಾಷಾನ್ ಸೀಮೆಯ ಸಲ್ಕದವರೆಗೂ ವಾಸಿಸುತ್ತಿದ್ದವರು ಗಾದ್ ಕುಲದವರು:12ಪ್ರಧಾನನಾದ ಯೋವೇಲ್, ಎರಡನೆಯವನಾದ ಶಾಫಾಮ್, ಯನ್ನೈ, ಬಾಷಾನಿನಲ್ಲಿರುವ ಶಾಫಾಟ್ ಇವರೂ ನಾಯಕರಾಗಿದ್ದರು.13ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್ ಎಂಬ ಏಳು ಕುಟುಂಬಗಳೂ ಇವರ ಕುಲಸಂಬಂಧಿಗಳು.14ಇವರು ಅಬೀಹೈಲನ ಮಕ್ಕಳು: ಅಬೀಹೈಲನು ಹೂರೀಯ ಮಗ, ಇವನು ಯಾರೋಹನ ಮಗ. ಯಾರೋಹನು ಗಿಲ್ಯಾದನ ಮಗ, ಇವನು ಮೀಕಾಯೇಲನ ಮಗ. ಮೀಕಾಯೇಲನು ಯೆಷೀಷೈಯನ ಮಗ, ಇವನು ಯಹ್ದೋವಿನ ಮಗ, ಇವನು ಅಹೀಬೂಜನ ಮಗ.15ಅಹೀಬೂಜನು ಅಬ್ದೀಯೇಲನ ಮಗ. ಅಬ್ದೀಯೇಲನು ಗೂನೀಯನ ಮಗ. ಇವನು ಇವರ ಗೋತ್ರದ ಮೂಲಪುರುಷನು.16ಗಾದ್ಯರು ಗಿಲ್ಯಾದಿನಲ್ಲಿಯೂ ಬಾಷಾನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ, ಶಾರೋನಿನ ಎಲ್ಲಾ ಹುಲ್ಲುಗಾವಲುಗಳಲ್ಲಿಯೂ ಅವುಗಳ ಮೇರೆಗಳಲ್ಲಿಯೂ ವಾಸಿಸುತ್ತಿದ್ದರು.17ಅವರೆಲ್ಲರೂ ಯೆಹೂದ್ಯರ ಅರಸನಾದ ಯೋತಾಮನ ಕಾಲದಲ್ಲಿಯೂ, ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಕಾಲದಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ದಾಖಲಿಸಲ್ಪಟ್ಟರು.18ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರಲ್ಲಿ ರಣವೀರರೂ ಗುರಾಣಿ ಖಡ್ಗಗಳನ್ನು ಹಿಡಿಯುವವರೂ, ಬಿಲ್ಲನ್ನು ಬೊಗ್ಗಿಸುವವರೂ, ಯುದ್ಧ ನಿಪುಣರೂ ಆಗಿರುವ ನಲ್ವತ್ತನಾಲ್ಕು ಸಾವಿರದ ಏಳು ನೂರ ಅರವತ್ತು ಸೈನಿಕರಿದ್ದರು.19ಅವರು ಹೋಗಿ ಹಗ್ರೀಯ, ಯೆಟೂರ್, ನಾಫೀಷ್ ಮತ್ತು ನೋದಾಬ್ ಇವರೊಡನೆಯೂ ಯುದ್ಧಮಾಡಿದರು.20ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.21ಈ ಯುದ್ಧದಲ್ಲಿ ಅವರ ಹಿಂಡುಗಳನ್ನು ಅಂದರೆ, ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳೂ, ಎರಡು ಸಾವಿರ ಕತ್ತೆಗಳು ಮತ್ತು ಒಂದು ಲಕ್ಷ ಜನರನ್ನೂ ಕೊಳ್ಳೆಹಿಡಿದರು.22ಏಕೆಂದರೆ ದೇವರು ಅವರ ಪರವಾಗಿ ಯುದ್ಧಮಾಡಿದ್ದರಿಂದ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ, ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.ಯೊರ್ದನಿನ ಪೂರ್ವದಿಕ್ಕಿನಲ್ಲಿದ್ದ ಮನಸ್ಸೆಯ ವಂಶಜರು
23ಮನಸ್ಸೆ ಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಗಿರಿ ಇವುಗಳ ವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸಿದರು.24ಇವರ ಗೋತ್ರಗಳ ಪ್ರಧಾನ ಪುರುಷರು ಏಫೆರ್, ಇಷ್ಷೀ, ಎಲೀಯೇಲ್, ಅಜ್ರೀಯೇಲ್, ಯೆರೆಮೀಯ, ಹೋದವ್ಯ ಮತ್ತು ಯೆಹ್ತೀಯೇಲ್. ಇವರು ರಣವೀರರೂ ಪ್ರಖ್ಯಾತಿ ಹೊಂದಿದವರು ಗೋತ್ರಪ್ರಧಾನರೂ ಆಗಿದ್ದರು.25ಅವರು ತಮ್ಮ ಪೂರ್ವಿಕರ ದೇವರಿಗೆ ದ್ರೋಹಿಗಳಾಗಿದರು. ಯೆಹೋವನು ತಮ್ಮ ಮುಂದೆಯೇ ಸಂಹರಿಸಿದ ಆ ದೇಶದ ನಿವಾಸಿಗಳ ದೇವರುಗಳನ್ನು ಆರಾಧಿಸತೊಡಗಿದರು.26ಆದುದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ, ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಹಿಡಿದು ಕರೆದೊಯ್ದರು. ಅವರು ಇಂದಿನವರೆಗೂ ಅಲ್ಲಿಯೇ ನೆಲೆಸುವಂತೆ ಮಾಡಿದ್ದಾನೆ ದೇವರು.
6ಲೇವಿಯರ ಕುಟುಂಬಗಳು
1ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.2ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.3ಅಮ್ರಾಮನ ಮಕ್ಕಳು ಆರೋನ್, ಮೋಶೆ ಮತ್ತು ಮಿರ್ಯಾಮ್. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.4ಎಲ್ಲಾಜಾರನು ಫೀನೆಹಾಸನನ್ನು ಪಡೆದನು; ಫೀನೆಹಾಸನು ಅಬೀಷೂವನನ್ನು ಪಡೆದನು;5ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀಯನು ಉಜ್ಜೀಯನನ್ನು ಪಡೆದನು.6ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತನನ್ನು ಪಡೆದನು.7ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆದನು.8ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು.9ಅಹೀಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು.10ಯೋಹಾನಾನನು ಅಜರ್ಯನನ್ನು ಪಡೆದನು. ಸೊಲೊಮೋನನು ಕಟ್ಟಿಸಿದ ಯೆರೂಸಲೇಮಿನ ದೇವಾಲಯದಲ್ಲಿ ಯಾಜಕ ಸೇವೆ ಮಾಡುತ್ತಿದ್ದವನು ಇವನೇ.11ಅಜರ್ಯನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆದನು.12ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು.13ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀಯನು ಅಜರ್ಯನನ್ನು ಪಡೆದನು.14ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾದಾಕನನ್ನು ಪಡೆದನು.15ನೆಬೂಕದ್ನೆಚ್ಚರನು ಯೆಹೋವನ ಪ್ರೇರಣೆಯಿಂದ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಸೆರೆಯೊಯ್ದಾಗ ಯೆಹೋಚಾದಾಕನು ಅವರೊಡನೆ ಇದ್ದನು.ಲೇವಿಯರ ಇತರ ವಂಶಾವಳಿ
16ಲೇವಿಯ ಮಕ್ಕಳು ಗೇರ್ಷೋಮ್, ಕೆಹಾತ್, ಮೆರಾರೀ.17ಗೇರ್ಷೋಮನ ಮಕ್ಕಳು ಲಿಬ್ನೀ ಮತ್ತು ಶಿಮ್ಮೀ.18ಕೆಹಾತನ ಮಕ್ಕಳು ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಇವರೇ.19ಮೆರಾರಿಯ ಮಕ್ಕಳು ಮಹ್ಲೀ ಮತ್ತು ಮುಷೀ. ಇವರೆಲ್ಲರೂ ಲೇವಿ ಗೋತ್ರಗಳ ಮೂಲಪುರುಷರು.20ಗೇರ್ಷೋಮನ ಗೋತ್ರ: ಗೇರ್ಷೋಮನ ಮಗ ಲಿಬ್ನೀ. ಇವನ ಮಗ ಯಹತ್, ಇವನ ಮಗ ಜಿಮ್ಮ. ಜಿಮ್ಮನ ಮಗ ಯೋವಾಹ,21ಯೋವಾಹನ ಮಗ ಇದ್ದೋ, ಇವನ ಮಗ ಜೆರಹ. ಜೆರಹನ ಮಗ ಯೆವತ್ರೈ.22ಕೆಹಾತನ ಸಂತಾನದವರು: ಇವನ ಮಗ ಅಮ್ಮೀನಾದಾಬ್, ಇವನ ಮಗ ಕೋರಹ. ಕೋರಹನ ಮಗ ಅಸ್ಸೀರ್,23ಇವನ ಮಗ ಎಲ್ಕಾನ. ಎಲ್ಕಾನನ ಮಗ ಎಬ್ಯಾಸಾಫ್. ಇವನ ಮಗ ಅಸ್ಸೀರ್.24ಅಸ್ಸೀರನ ಮಗ ತಹತ್, ಇವನ ಮಗ ಊರೀಯೇಲ್. ಊರೀಯೇಲನ ಮಗ ಉಜ್ಜೀಯ, ಇವನ ಮಗ ಸೌಲ್.25ಎಲ್ಕಾನನ ಮಕ್ಕಳು; ಅಮಾಸೈ, ಅಹೀಮೋತ್ ಮತ್ತು ಎಲ್ಕಾನ್ ಎಂಬವರು.26ಎಲ್ಕಾನನ ಸಂತಾನದವರು. ಇವನ ಮಗನು, ಚೋಫೈ, ಇವನ ಮಗ ನಹತ್.27ನಹತನ ಮಗ ಎಲೀಯಾಬ್, ಇವನ ಮಗ ಯೆರೋಹಾಮ್, ಇವನ ಮಗ ಎಲ್ಕಾನ್.28ಸಮುವೇಲನ ಮಕ್ಕಳು ಯೋವೇಲ್ ಚೊಚ್ಚಲ ಮಗನು ಮತ್ತು ಅಬೀಯನು ಎರಡನೆಯವನು.29ಮೆರಾರೀಯ ಸಂತಾನದವರು. ಇವನ ಮಗ ಮಹ್ಲೀ. ಇವನ ಮಗ ಲಿಬ್ನೀ, ಇವನ ಮಗ ಶಿಮ್ಮೀ. ಶಿಮ್ಮೀಯ ಮಗನು ಉಜ್ಜ.30ಇವನ ಮಗನು ಶಿಮ್ಮಾ, ಇವನ ಮಗನು ಹಗ್ಗೀಯ, ಇವನ ಮಗನು ಅಸಾಯ.ಗಾಯಕರಾದ ಲೇವಿಯರ ವಂಶಾವಳಿ
31ಮಂಜೂಷವು ವಿಶ್ರಾಂತಿಹೊಂದಿದ ಮೇಲೆ ದಾವೀದನಿಂದ ಯೆಹೋವನ ಆಲಯದಲ್ಲಿ ವಾದ್ಯ ಸೇವೆಗೆ ನೇಮಿಸಲ್ಪಟ್ಟವರ ಪಟ್ಟಿ.32ಸೊಲೊಮೋನನು ಯೆರೂಸಲೇಮಿನಲ್ಲಿ ಯೆಹೋವನ ಆಲಯವನ್ನು ಕಟ್ಟುವ ತನಕ ಅವರು ದೇವದರ್ಶನದ ಗುಡಾರವೆಂಬ ಆಲಯದ ಮುಂದೆ ತಮ್ಮ ಕ್ರಮಾನುಸಾರವಾಗಿ ವಾದ್ಯ ಸೇವೆಯನ್ನು ನಡೆಸುತ್ತಿದ್ದರು.33ದೇವಾಲಯದ ಸೇವಕರೂ ಅವರ ವಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ.34ಸಮುವೇಲನು ಎಲ್ಕಾನನ ಮಗ. ಇವನು ಯೆರೋಹಾಮನ ಮಗ, ಯೆರೋಹಾಮನು ಎಲೀಯೇಲನ ಮಗ, ಇವನು ತೋಹನ ಮಗ.35ತೋಹನು ಚೂಫನ ಮಗ, ಇವನು ಎಲ್ಕಾನನ ಮಗ, ಎಲ್ಕಾನನು ಮಹತನ ಮಗ, ಮಹತನನು ಅಮಾಸೈಯ ಮಗ, ಅಮಾಸೈಯನು ಎಲ್ಕಾನನ ಮಗ.36ಎಲ್ಕಾನನು ಯೋವೇಲನ ಮಗ, ಇವನು ಅಜರ್ಯನ ಮಗ. ಅಜರ್ಯನು ಚೆಫನ್ಯನ ಮಗ,37ಇವನು ತಹತನ ಮಗ. ತಹತನು ಅಸೀರನ ಮಗ, ಅಸ್ಸೀರನು ಎಬ್ಯಾಸಾಫನ ಮಗ, ಇವನು ಕೋರಹನ ಮಗ, ಕೋರಹನು ಇಚ್ಹಾರನ ಮಗ.38ಇಚ್ಹಾರನು ಕೆಹಾತನ ಮಗ, ಇವನು ಲೇವಿಯನ ಮಗ, ಲೇವಿಯು ಇಸ್ರಾಯೇಲನ ಮಗ.39ಇವನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನಾದ ಆಸಾಫನು ಎರಡನೆಯವನು. ಇವನು ಬೆರೆಕ್ಯನ ಮಗ, ಇವನು ಶಿಮ್ಮನ ಮಗ.40ಶಿಮ್ಮನು ಮೀಕಾಯೇಲನ ಮಗ, ಇವನು ಬಾಸೇಯನ ಮಗ, ಬಾಸೇಯನು ಮಲ್ಕೀಯನ ಮಗ.41ಮಲ್ಕೀಯನು ಎತ್ನಿಯ ಮಗ, ಇವನು ಜೆರಹನ ಮಗ, ಜೆರಹನು ಅದಾಯನ ಮಗನು.42ಅದಾಯನು ಏತಾನನ ಮಗ, ಇವನು ಜಿಮ್ಮನ ಮಗ, ಜಿಮ್ಮನು ಶಿಮ್ಮೀಯ ಮಗ.43ಶಿಮ್ಮೀಯು ಯಹತನ ಮಗ, ಇವನು ಗೇರ್ಷೋಮನ ಮಗ, ಗೇರ್ಷೋಮನು ಲೇವಿಯ ಮಗ.44ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ, ಮೆರಾರಿಯನೂ ಆದ ಏತಾನನು ಮೂರನೆಯವನು. ಇವನು ಕೀಷೀಯ ಮಗ, ಇವನು ಅಬ್ದೀಯನ ಮಗ, ಇವನು ಮಲ್ಲೂಕನ ಮಗ.45ಮಲ್ಲೂಕನು ಹಷಬ್ಯನ ಮಗ, ಇವನು ಅಮಚ್ಯನ ಮಗ, ಇವನು ಹಿಲ್ಕೀಯನ ಮಗ.46ಹಿಲ್ಕೀಯನು ಅಮ್ಚೀಯನ ಮಗ, ಇವನು ಬಾನೀಯನ ಮಗ, ಬಾನೀಯು ಶೆಮೆರನ ಮಗ.47ಶೆಮೆರನು ಮಹ್ಲೀಯ ಮಗ, ಇವನು ಮೂಷೀಯ ಮಗ. ಮೂಷೀಯು ಮೆರಾರಿಯ ಮಗ, ಮೆರಾರಿಯು ಲೇವಿಯ ಮಗನು.ಮಹಾಯಾಜಕನಾದ ಆರೋನನ ವಂಶಾವಳಿ
48ಅವರ ಸಹೋದರರಾದ ಇತರ ಲೇವಿಯರು ದೇವಾಲಯದ ಗುಡಾರದ ಸೇವೆಗಾಗಿ ನೇಮಿಸಲ್ಪಟ್ಟರು.49ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗೆ ಅನುಸಾರವಾಗಿ ಆರೋನನೂ, ಅವನ ಮಕ್ಕಳೂ ಇಸ್ರಾಯೇಲರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮ ಮಾಡುತ್ತಾ, ಧೂಪ ಹಾಕುತ್ತಾ, ದೇವಾಲಯದ ಅತಿಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ, ದೋಷಪರಿಹಾರ ಮಾಡುತ್ತಾ ಇದ್ದರು.50ಆರೋನನ ಸಂತಾನದವರು: ಆರೋನನ ಮಗ ಎಲ್ಲಾಜಾರ್, ಇವನ ಮಗ ಫೀನೆಹಾಸ್, ಫೀನೆಹಾಸನ ಮಗ ಅಬೀಷೂವ.51ಅಬೀಷೂವನ ಮಗ ಬುಕ್ಕೀ, ಬುಕ್ಕೀಯ ಮಗ ಉಜ್ಜೀ, ಇವನ ಮಗ ಜೆರಹ್ಯಾಹ, ಇವನ ಮಗ ಮೆರಾಯೋತ್.52ಮೆರಾಯೋತನ ಮಗ ಅಮರ್ಯ, ಅಮರ್ಯನ ಮಗ ಅಹೀಟೂಬ್.53ಅಹೀಟೂಬನ ಮಗ ಚಾದೋಕ್, ಇವನ ಮಗ ಅಹಿಮಾಚ್.ಲೇವಿಯರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು
54ಲೇವಿಯರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು: ಆರೋನನ ಸಂತಾನದವರಾದ ಕೇಹಾತನ ಗೋತ್ರದವರಿಗೆ ಚೀಟು ಮೊದಲು ಬಿದ್ದಿತು.55ಆದುದರಿಂದ ಇಸ್ರಾಯೇಲರು ಅವರಿಗೆ ಯೆಹೂದ ಸೀಮೆಯ ಹೆಬ್ರೋನ್ ಪಟ್ಟಣವನ್ನೂ ಮತ್ತು ಅದರ ಸುತ್ತಲಿನ ಗೋಮಾಳಗಳನ್ನು ಕೊಟ್ಟರು.56ಆದರೆ ಅದರ ಹೊಲಗಳನ್ನೂ ಅದಕ್ಕೆ ಸೇರಿದ ಗ್ರಾಮಗಳನ್ನೂ, ಯೆಫುನ್ನೆಯನ ಮಗನಾದ ಕಾಲೇಬನಿಗೆ ಕೊಟ್ಟರು.57ಆರೋನನ ವಂಶದವರಿಗೆ ಹೆಬ್ರೋನ್ ಎಂಬ ಆಶ್ರಯ ನಗರವನ್ನು, ಲಿಬ್ನ ಮತ್ತು ಅದರ ಗೋಮಾಳಗಳು, ಯತ್ತೀರ್, ಎಷ್ಟೆಮೋವ, ಅವುಗಳ ಉಪನಗರಗಳೂ,58ಹೀಲೇನ್, ದೆಬೀರ್59ಆಷಾನ್, ಬೇತ್‌ಷೆಮೆಷ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳನ್ನೂ,60ಬೆನ್ಯಾಮೀನನ ಕುಲದಿಂದ ಗೆಬ, ಅಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಒಟ್ಟು ಪಟ್ಟಣಗಳು ಹದಿಮೂರು.61ಕೆಹಾತ್ಯರ ಉಳಿದ ಕುಟುಂಬಗಳಿಗೆ ಚೀಟು ಹಾಕುವುದರ ಮೂಲಕ ಮನಸ್ಸೆ ಕುಲದ ಸ್ವತ್ತಿನಿಂದ ಹತ್ತು ಪಟ್ಟಣಗಳು ದೊರಕಿದವು.62ಗೇರ್ಷೋಮ್ಯರ ಕುಟುಂಬಗಳಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ, ಬಾಷಾನಿನಲ್ಲಿರುವ ಮನಸ್ಸೆ ಕುಲಗಳ ಸ್ವತ್ತಿನಿಂದ ಹದಿಮೂರು ಪಟ್ಟಣಗಳು ದೊರಕಿದವು.63ಮೆರಾರೀ ಕುಟುಂಬಗಳಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳ ಸ್ವತ್ತಿನಿಂದ ಹನ್ನೆರಡು ಪಟ್ಟಣಗಳು ಚೀಟು ಹಾಕುವುದರಿಂದ ದೊರಕಿದವು.64ಇಸ್ರಾಯೇಲರು ಲೇವಿಯರಿಗೆ ಆ ಪಟ್ಟಣಗಳನ್ನಲ್ಲದೆ ಅವುಗಳಿಗೆ ಸೇರಿದ ಗೋಮಾಳುಗಳನ್ನೂ ಕೊಟ್ಟರು.65ಅವರು ಚೀಟು ಹಾಕಿ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನನ ಕುಲಗಳಿಂದ ಮೇಲೆ ಹೇಳಿದ ಪಟ್ಟಣಗಳನ್ನೂ ಕೊಟ್ಟರು.66ಕೆಹಾತ್ಯರ ಕುಟುಂಬಗಳಿಗೆ ಎಫ್ರಾಯೀಮ್ಯರ ಸ್ವತ್ತಿನಿಂದ67ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ, ಗೆಜೆರ್ ಮತ್ತು ಅದರ ಉಪನಗರಗಳನ್ನೂ,68ಯೊಕ್ಮೆಯಾಮ್ ಮತ್ತು ಅದರ ಗೋಮಾಳಗಳು, ಬೇತ್ ಹೋರೋನ್ ಮತ್ತು ಅದರ ಉಪನಗರಗಳು,69ಅಯ್ಯಾಲೋನ್, ಗತ್ರಿಮ್ಮೋನ್, ಎಂಬ ಗೋಮಾಳ ಸಹಿತವಾದ ಪಟ್ಟಣಗಳು ಚೀಟಿಹಾಕುವುದರ ಮೂಲಕ ದೊರಕಿದವು.70ಮನಸ್ಸೆ ಕುಲದ ಸ್ವತ್ತಿನ ಆನೇರ್, ಬಿಳ್ಳಾಮ್ ಎಂಬ ಹುಲ್ಲುಗಾವಲು ಸಹಿತವಾದ ಪಟ್ಟಣಗಳು ಕೆಹಾತ್ಯರ ಉಳಿದ ಕುಟುಂಬಗಳ ಪಾಲಿಗೆ ಬಂದವು.71ಗೇರ್ಷೊಮ್ಯರಿಗೆ ಮನಸ್ಸೆ ಕುಲದ ಸ್ವತ್ತಿನಿಂದ ಬಾಷಾನಿನ ಗೋಲಾನ್, ಅಷ್ಟಾರೋಟ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.72ಇಸ್ಸಾಕಾರ್ಯರ ಸ್ವತ್ತಿನಿಂದ ಕೆದೆಷ್, ದಾಬೆರತ್,73ರಾಮೋತ್, ಅನೇಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.74ಅಶೇರನ ಕುಲದ ಸ್ವತ್ತಿನಿಂದ ಮಾಷಾಲ್, ಅಬ್ದೋನ್.75ಹೂಕೋಕ್, ರೆಹೋಬ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.76ನಫ್ತಾಲಿ ಕುಲದ ಸ್ವತ್ತಿನಿಂದ ಗಲಿಲಾಯದ ಕೆದೆಷ್, ಹಮ್ಮೋನ್, ಕಿರ್ಯಾತಯಿಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.77ಮಿಕ್ಕ ಲೇವಿಯರಾದ ಮೆರಾರಿಯರಿಗೆ ಜೆಬುಲೋನ್ ಕುಲದ ಸ್ವತ್ತಿನಿಂದ ರಿಮ್ಮೋನೋ, ತಾಬೋರ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳೂ,78ಯೆರಿಕೋವಿನ ಬಳಿಯಲ್ಲಿ ಹರಿಯುವ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿರುವ ಅರಣ್ಯದ ಬೆಚೆರ್ ಮತ್ತು ಅದರ ಗೋಮಾಳಗಳು, ಯಹಚ್ ಮತ್ತು ಅದರ ಗೋಮಾಳಗಳು ರೂಬೇನ್ ಕುಲದಿಂದ ದೊರಕಿದವು.79ಕೆದೇಮೋತ್ ಮತ್ತು ಅದರ ಗೋಮಾಳಗಳು, ಮೇಫಾತ್ ಮತ್ತು ಅದರ ಗೋಮಾಳಗಳು ರೂಬೇನ್ ಕುಲದಿಂದ ದೊರಕಿದವು.80ಗಾದ್ ಕುಲದ ಸ್ವತ್ತಿನಿಂದ ಗಿಲ್ಯಾದಿನ ರಾಮೋತ್ ಮತ್ತು ಅದರ ಗೋಮಾಳಗಳು ಮಹನಯಿಮ್,81ಹೆಷ್ಬೋನ್ ಮತ್ತು ಅದರ ಗೋಮಾಳಗಳು, ಯಗ್ಜೇರ್ ಮತ್ತು ಅದರ ಗೋಮಾಳಗಳು ಸಹಿತವಾದ ಪಟ್ಟಣಗಳು ದೊರಕಿದವು.
7ಇಸ್ಸಾಕಾರನ ಕುಲ
1ಇಸ್ಸಾಕಾರನ ಮಕ್ಕಳು: ತೋಲ, ಪೂವ, ಯಾಶೂಬ್, ಶಿಮ್ರೋನ್ ಎಂಬ ನಾಲ್ಕು ಜನರು.2ತೋಲನ ಮಕ್ಕಳಾದ, ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರು ತೋಲನ ವಂಶದ ಕುಟುಂಬಗಳಲ್ಲಿ ಪ್ರಧಾನ ಪುರುಷರೂ, ರಣವೀರರೂ ಆಗಿದ್ದರು. ತೋಲ ವಂಶದವರ ಸಂಖ್ಯೆಯು ದಾವೀದನ ಕಾಲದಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು.3ಉಜ್ಜೀಯನ ಮಗ ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು ಮಿಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ. ಇವರು ಈ ಕುಟುಂಬದ ಗೋತ್ರಪ್ರಧಾನರು.4ಇವರ ಹೆಂಡತಿ ಮಕ್ಕಳೂ, ಇವರ ಗೋತ್ರ ಕುಟುಂಬಗಳಿಗೆ ಸೇರುವ ಯುದ್ಧಭಟರು ಮತ್ತು ಹೆಂಡತಿ, ಮಕ್ಕಳು ಒಟ್ಟು ಮೂವತ್ತಾರು ಸಾವಿರ.5ಇವರ ಗೋತ್ರ ಸಂಬಂಧಿಗಳಾದ ಇಸ್ಸಾಕಾರ್ಯರೆಲ್ಲರೂ ರಣವೀರರು. ಈ ಕುಟುಂಬದ ಬಹುಪಾಲು ಪುರುಷರು ಸೈನ್ಯದಲ್ಲಿ ಸೇವೆಮಾಡಲು ಯೋಗ್ಯರಾಗಿದ್ದರೆಂದು ತಮ್ಮನ್ನು ಅರ್ಪಿಸಿಕೊಂಡರು, ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟವರು ಒಟ್ಟು ಎಂಭತ್ತೇಳು ಸಾವಿರ ಮಂದಿ.ಬೆನ್ಯಾಮೀನ್ ಕುಲ
6ಬೆನ್ಯಾಮೀನನಿಗೆ ಬೆಳ, ಬೆಕೆರ್, ಯೆದೀಯಯೇಲ್ ಎಂಬ ಮೂರು ಮಕ್ಕಳಿದ್ದರು.7ಬೆಳನ ಮಕ್ಕಳು ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ ಎಂಬವರು. ಈ ಐದು ಜನರು ಗೋತ್ರ ಪ್ರಧಾನರು ರಣವೀರರೂ ಆಗಿದ್ದರು. ಅವರ ವಂಶಾವಳಿಯ ಪಟ್ಟಿಯಲ್ಲಿ ಇಪ್ಪತ್ತೆರಡು ಸಾವಿರದ ಮೂವತ್ತನಾಲ್ಕು ಜನರೆಂದು ಲೆಕ್ಕಿಸಲ್ಪಟ್ಟವರು.8ಬೆಕೆರನ ಮಕ್ಕಳು ಜೆಮೀರ್, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್ ಮತ್ತು ಆಲೆಮೆತ್ ಎಂಬವರು.9ರಣವೀರರಾದ ಈ ಗೋತ್ರಪ್ರಧಾನರ ವಂಶಾವಳಿಯ ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟ ಇಪ್ಪತ್ತು ಸಾವಿರದ ಇನ್ನೂರು ಯುದ್ಧ ಪರಾಕ್ರಮಶಾಲಿಗಳು.10ಯೆದೀಯಯೇಲನ ಮಗ ಬಿಲ್ಹಾನ್. ಬಿಲ್ಹಾನನ ಮಕ್ಕಳು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್, ಅಹೀಷೆಹರ್ ಎಂಬವರು.11ಈ ಗೋತ್ರ ಪ್ರಧಾನರಿಗೆ ಸೇರಿದವರೆಲ್ಲರೂ ಯೆದೀಯಯೇಲನ ಸಂತಾನದವರು. ಇವರಲ್ಲಿ ಹದಿನೇಳು ಸಾವಿರದ ಇನ್ನೂರು ಯುದ್ಧದಲ್ಲಿ ಹೋರಾಡತಕ್ಕ ಪರಾಕ್ರಮ ಶಾಲಿಗಳು.ದಾನ್ ಕುಲ
12ಶುಪ್ಪೀಮ್ ಮತ್ತು ಹುಪ್ಪೀಮರು ಈರನ ಮಕ್ಕಳು. ಹುಶೀಮನು ಅಹೇರನ ಮಗ.ನಫ್ತಾಲಿ ಕುಲ
13ನಫ್ತಾಲಿಯ ಮಕ್ಕಳು ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಇವರು ಬಿಲ್ಹಳ ಸಂತಾನದವರು.ಮನಸ್ಸೆ ಕುಲ
14ಮನಸ್ಸೆಯ ಸಂತಾನದವರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಷ್ರೀಯೇಲ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ.15ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮ್ಯರಿಂದ ಹೆಣ್ಣನ್ನು ತೆಗೆದುಕೊಂಡನು. ಅವನ ತಂಗಿಯ ಹೆಸರು ಮಾಕ. ಅವನ ತಮ್ಮನ ಹೆಸರು ಚೆಲೋಫಾದ್. ಚೆಲೋಫಾದನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು.16ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು, ಅವನಿಗೆ ಪೆರೇಷ್ ಎಂದು ಹೆಸರಿಟ್ಟಳು. ಇವನ ತಮ್ಮನ ಹೆಸರು ಶೆರೆಷ್. ಶೆರೆಷನ ಮಕ್ಕಳು ಊಲಾಮ್ ಮತ್ತು ರೆಕೆಮ್.17ಉಲಾಮನ ಮಗನು ಬೆದಾನ್. ಇವರು ಮನಸ್ಸೆಯ ಮೊಮ್ಮಗ ಹಾಗೂ ಮಾಕೀರನ ಮಗ. ಇವರು ಗಿಲ್ಯಾದನ ಸಂತಾನದವರು.18ಗಿಲ್ಯಾದನ ತಂಗಿಯಾದ ಹಮ್ಮೋಲೆಕೆತಳು ಈಷ್ಹೋದ್, ಅಬೀಯೆಜೆರ್, ಮಹ್ಲ ಎಂಬವರನ್ನು ಹೆತ್ತಳು.19ಶೆಮೀದನ ಮಕ್ಕಳು ಅಹ್ಯಾನ್, ಶೆಕೆಮ್, ಲಿಕ್ಹೀ, ಅನೀಯಾಮ್.ಎಫ್ರಾಯೀಮ್ ಕುಲ
20ಎಫ್ರಾಯೀಮನ ಸಂತಾನದವರು: ಎಫ್ರಾಯೀಮನ ಮಗ ಶೂತೆಲಹ, ಇವನ ಮಗ ಬೆರೆದ್. ಬೆರೆದನ ಮಗ ತಹತ್; ಇವನ ಮಗ ಎಲ್ಲಾದ್. ಎಲ್ಲಾದನ ಮಗ ತಹತ್;21ತಹತನ ಮಗ ಜಾಬಾದ್, ಜಾಬಾದನ ಮಕ್ಕಳು ಶೂತೆಲಹ, ಏಜೆರ್ ಮತ್ತು ಎಲ್ಲಾದ್. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವುದಕ್ಕೋಸ್ಕರ ಗಟ್ಟಾ ಇಳಿದು ಅವರ ದೇಶಕ್ಕೆ ಹೋದುದರಿಂದ ಆ ದೇಶದ ಮೂಲ ನಿವಾಸಿಗಳು ಇವರನ್ನು ಕೊಂದುಹಾಕಿದರು.22ಆದುದರಿಂದ ಇವರ ತಂದೆಯಾದ ಎಫ್ರಾಯೀಮನು ಬಹುದಿನಗಳವರೆಗೂ ದುಃಖಪಡುತ್ತಿದ್ದನು. ಅವನ ಸಹೋದರರು ಅವನನ್ನು ಸಂತೈಸುವುದಕ್ಕೋಸ್ಕರ ಬಂದರು.23ಅವನು ತನ್ನ ಹೆಂಡತಿಯನ್ನು ಸಂಗಮಿಸಲು, ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಇದು ಅವನ ಕುಟುಂಬಕ್ಕೆ ಒದಗಿದ ಆಪತ್ತಿನಲ್ಲಿ ಸಂಭವಿಸಿದ್ದರಿಂದ ಆ ಮಗನಿಗೆ ಬೆರೀಯ ಎಂದು ಹೆಸರಿಟ್ಟನು.24ಶೇರ ಎಂಬವಳು ಅವನ ಮಗಳು. ಈಕೆಯು ಮೇಲಣ ಮತ್ತು ಕೆಳಗಣ ಬೇತ್ ಹೊರೋನ್ ಎಂಬ ಪಟ್ಟಣಗಳನ್ನು ಮತ್ತು ಉಜ್ಜೀನ್ ಶೇರ ಎಂಬ ಪಟ್ಟಣಗಳನ್ನೂ ಕಟ್ಟಿಸಿದಳು.25ಬೆರೀಯ ಮಗ ರೆಫಹ. ಇವನ ಮಗ ರೆಷೆಫ್, ಇವನ ಮಗ ತೆಲಹ, ಇವನ ಮಗ ತಹಾನ್.26ತಹಾನನ ಮಗ ಲದ್ದಾನ್, ಇವನ ಮಗ ಅಮ್ಮೀಹೂದ್, ಇವನ ಮಗ ಎಲೀಷಾಮ.27ಎಲೀಷಾಮ ಮಗ ನೋನ್, ಇವನ ಮಗ ಯೆಹೋಷುವ.28ಅವರು ವಾಸಿಸುವ ಸ್ವತ್ತಿನ ಮೇರೆಗಳು ದಕ್ಷಿಣ ದಿಕ್ಕಿನಲ್ಲಿ ಬೇತೇಲ್ ಪಟ್ಟಣ, ಅದರ ಗ್ರಾಮಗಳೂ ಪೂರ್ವ ದಿಕ್ಕಿನಲ್ಲಿ ನಾರಾನ್, ಪಶ್ಚಿಮ ದಿಕ್ಕಿನಲ್ಲಿ ಗೆಜೆರ್ ಪಟ್ಟಣವೂ ಅದರ ಗ್ರಾಮಗಳೂ; ಉತ್ತರ ದಿಕ್ಕಿನಲ್ಲಿ ಶೆಕೆಮ್ ಮತ್ತು ಆಯಾ ಪಟ್ಟಣಗಳೂ ಅವುಗಳ ಗ್ರಾಮಗಳು.29ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳೂ, ಅವುಗಳ ಗ್ರಾಮಗಳೂ ಮನಸ್ಸೆ ಕುಲದವರ ವಶದಲ್ಲಿದ್ದವು. ಈ ಊರುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸಿಸುತ್ತಿದ್ದರು.ಅಶೇರ ಕುಲ
30ಅಶೇರನ ಸಂತಾನದವರು: ಇಮ್ನ, ಇಷ್ವ, ಇಷ್ವೀ, ಬೆರೀಯ ಎಂಬವರೂ ಸೆರಹಳೆಂಬ ಇವರ ತಂಗಿ.31ಬೆರೀಯನ ಮಕ್ಕಳು ಹೆಬೆರ್, ಬಿರ್ಜೈತ್ ಊರಿನವರ ಮೂಲಪುರುಷನಾದ ಮಲ್ಕೀಯೇಲ್.32ಹೆಬೆರನು ಯಫ್ಲೇಟ್, ಶೋಮೇರ್, ಹೋತಾಮ್ ಇವರನ್ನೂ ಇವರ ತಂಗಿಯಾದ ಶೂವಳನ್ನೂ ಪಡೆದನು.33ಪಾಸಕ್, ಬಿಮ್ಹಾಲ್, ಅಶ್ವಾತ್ ಇವರು ಯಫ್ಲೇಟನ ಮಕ್ಕಳು.34ಅಹೀ, ರೋಹ್ಗ, ಹುಬ್ಬ, ಅರಾಮ್ ಎಂಬುವವರು ಶಮೆರನ ಮಕ್ಕಳು.35ಇವನ ತಮ್ಮನಾದ ಹೆಲೆಮನ ಮಕ್ಕಳು, ಚೋಫಹ, ಇಮ್ನ, ಶೇಲೆಷ್, ಆಮಾಲ್ ಇವರೇ.36ಚೋಫಹನ ಮಕ್ಕಳು ಸೂಹ, ಹರ್ನೇಫೆರ್, ಶೂಗಾಲ್, ಬೇರೀ, ಇಮ್ರ,37ಬೆಚೆರ್, ಹೋದ್, ಶಮ್ಮ, ಶಿಲ್ಷನು, ಇತ್ರಾನ್, ಬೇರ.38ಯೆಫುನ್ನೆ, ಪಿಸ್ಪ, ಅರಾ ಎಂಬುವವರು ಯೆತೆರನ ಮಕ್ಕಳು.39ಆರಹ, ಹನ್ನಿಯೇಲ, ರಿಚ್ಯ ಇವರು ಉಲ್ಲನ ಮಕ್ಕಳು.40ಇವರೆಲ್ಲರು ಆಶೇರ್ಯರಲ್ಲಿ ಗೋತ್ರಪ್ರಧಾನರೂ, ಯುದ್ಧಪ್ರವೀಣರಾದ ರಣವೀರರೂ ಮತ್ತು ಶ್ರೇಷ್ಠ ನಾಯಕರೂ ಆಗಿದ್ದರು. ಇವರ ವಂಶಾವಳಿಯ ಪಟ್ಟಿಯ ಪ್ರಕಾರ ಯುದ್ಧ ಪ್ರವೀಣರಾದ ಭಟರ ಸಂಖ್ಯೆ ಇಪ್ಪತ್ತಾರು ಸಾವಿರ.
8ಬೆನ್ಯಾಮೀನ್ ಕುಲ
1ಬೆನ್ಯಾಮೀನನ ಮಕ್ಕಳು: ಬೆಳನು ಚೊಚ್ಚಲ ಮಗ. ಅಷ್ಬೇಲ್ ಎರಡನೆಯವನು, ಅಹ್ರಹ ಮೂರನೆಯವನು,2ನೋಹ ನಾಲ್ಕನೆಯವನು, ರಾಫ ಐದನೆಯವನು.3ಬೆಳನ ಮಕ್ಕಳು: ಅದ್ದಾರ್, ಗೇರ, ಅಬೀಹೂದ್,4ಅಬೀಷೂವ, ನಾಮಾನ್, ಅಹೋಹ,5ಗೇರ, ಶೆಪೂಫಾನ್ ಮತ್ತು ಹೂರಾಮ್ ಎಂಬವರು.6ಏಹೂದನ ಸಂತಾನದವರು ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರು.7ನಾಮಾನ್, ಅಹೀಯ ಮತ್ತು ಗೇರ ಇವರು ಮಾನಹತಿಗೆ ಒಯ್ಯಲ್ಪಟ್ಟರು. ಏಹೂದನು ಉಚ್ಚ ಮತ್ತು ಅಹೀಹುದ್ ಇವರನ್ನು ಪಡೆದನು.8ಶಹರಯಿಮನು ತನ್ನ ಹೆಂಡತಿಯರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ,9ಮತ್ತೊಬ್ಬ ಹೆಂಡತಿಯಾದ ಹೋದೆಷಳಿಂದ ಮೋವಾಬ್ ದೇಶದಲ್ಲಿ ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ ಮತ್ತು ಮಿರ್ಮ ಇವರನ್ನು ಪಡೆದನು.10ಶಹರಯಿಮನ ಮಕ್ಕಳಾದ ಇವರು ಗೋತ್ರ ಪ್ರಧಾನರಾಗಿದ್ದರು.11ಇದಲ್ಲದೆ ಅವನು ಹುಷೀಮಳಿಂದ ಅಬೀಟೂಬ್, ಎಲ್ಪಾಲ ಇವರನ್ನು ಪಡೆದನು.12ಎಲ್ಪಾಲನ ಮಕ್ಕಳು ಏಬರ್, ಮಿಷ್ಷಾಮ್ ಮತ್ತು ಶೆಮೆದ್. ಇವರೂ ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು.13ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ, ಗತ್ ಊರಿನವರನ್ನು ಓಡಿಸಿ ಬಿಟ್ಟವರು ಬೆರೀಯ ಮತ್ತು ಶಮ.14ಅಹಿಯೋ, ಶಾಷಕ್, ಯೆರೇಮೋತ್,15ಜೆಬದ್ಯ, ಅರಾದ್, ಎದೆರ್,16ಮಿಕಾಯೇಲ್, ಇಷ್ಪ ಮತ್ತು ಯೋಹ ಬೆರೀಯನ ಮಕ್ಕಳು.17ಎಲ್ಪಾಲನ ಮಕ್ಕಳು ಜೆಬದ್ಯ, ಮೆಷುಲ್ಲಾಮ್, ಹೆಬೆರ್, ಹಿಜ್ಕೀ,18ಇಷ್ಮೆರೈ, ಇಜ್ಲೀಯ ಮತ್ತು ಯೋಬಾಬ್.19ಯಾಕೀಮ್, ಜಿಕ್ರೀ, ಜಬ್ದೀ,20ಎಲೀಗೇನೈ, ಚಿಲ್ಲೆತೈ, ಎಲೀಯೇಲ್,21ಆದಾಯ, ಬೆರಾಯ ಮತ್ತು ಶಿಮ್ರಾತ್ ಇವರು ಶಮ್ಮೀಯ ಮಕ್ಕಳು.22ಇಷ್ಪಾನ್, ಏಬೆರ್, ಎಲೀಯೇಲ್,23-24ಅಬ್ದೋನ್, ಜಿಕ್ರೀ, ಹಾನಾನ್, ಹನನ್ಯ, ಏಲಾಮ್, ಅನೆತೋತೀಯ,25ಇಫ್ದೆಯಾಹ ಮತ್ತು ಪೆನೂವೇಲನು ಇವರು ಶಾಷಕನ ಮಕ್ಕಳು.26ಶಂಷೆರೈ, ಶೆಹರ್ಯ, ಅತಲ್ಯ,27ಯಾರೆಷ್ಯ, ಏಲೀಯ ಮತ್ತು ಜಿಕ್ರೀ ಇವರು ಯೆರೋಹಾಮನ ಮಕ್ಕಳು.28ಇವರು ವಂಶಾವಳಿಯ ಪ್ರಕಾರ ಗೋತ್ರಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.29ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಗೂವೇಲ್ ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.30ಚೊಚ್ಚಲ ಮಗನು ಅಬ್ದೋನನು, ತರುವಾಯ ಹುಟ್ಟಿದವರು, ಚೂರ್, ಕೀಷ್, ಬಾಳ್, ನಾದಾಬ್,31ಗೆದೋರ್, ಅಹ್ಯೋ ಮತ್ತು ಜೆಕೆರ್ ಇವರು.32ಮಿಕ್ಲೋತನು ಶಿಮಾಹನನ್ನು ಪಡೆದನು. ಇವರು ತಮ್ಮ ಗೋತ್ರದ ಕುಟುಂಬದವರೊಂದಿಗೆ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು.ಸೌಲನ ಕುಟುಂಬ
33ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ ಇವರನ್ನು ಪಡೆದನು.34ಯೋನಾತಾನನು ಮೆರೀಬ್ಬಾಳನನ್ನು ಪಡೆದನು; ಮೆರೀಬ್ಬಾಳನು ಮೀಕನನ್ನು ಪಡೆದನು.35ಮೀಕನ ಮಕ್ಕಳು: ಪೀತೋನ್, ಮೆಲೆಕ್, ತರೇಯ, ಆಹಾಜ್ ಇವರೇ.36ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾಹನು ಆಲೆಮೆತ್, ಅಜ್ಮಾವೆತ್, ಜಿಮ್ರೀ ಇವರನ್ನು ಪಡೆದನು.37ಜಿಮ್ರೀಯು ಮೋಚನನ್ನು ಪಡೆದನು. ಮೋಚನು ಬಿನ್ನನನ್ನು ಪಡೆದನು. ಇವನ ಮಗ ರಾಫ. ಇವನ ಮಗನು ಎಲ್ಲಾಸ. ಇವನ ಮಗನು ಅಚೇಲ.38ಅಚೇಲನಿಗೆ ಆರು ಮಂದಿ ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.39ಆಚೇಲನ ತಮ್ಮನಾದ ಏಷಕನ ಮಕ್ಕಳು: ಚೊಚ್ಚಲು ಮಗ ಊಲಾಮ್, ಎರಡನೆಯವನು ಯೆಯೂಷ್, ಮೂರನೆಯವನಾದ ಎಲೀಫೆಲೆಟ್.40ಊಲಾಮನ ಮಕ್ಕಳು ಬಿಲ್ಲನ್ನು ಉಪಯೋಗಿಸುವುದರಲ್ಲಿ ಗಟ್ಟಿಗರಾದ ರಣವೀರರು. ಅವರು ಅನೇಕ ಮಂದಿ ಮಕ್ಕಳನ್ನೂ, ಮೊಮ್ಮಕ್ಕಳನ್ನೂ ಪಡೆದರು. ಒಟ್ಟು ನೂರ ಐವತ್ತು ಜನರು ಅವರ ಕುಟುಂಬದಲ್ಲಿದ್ದರು. ಎಲ್ಲರೂ ಬೆನ್ಯಾಮೀನ್ಯರು.
9ಸೆರೆವಾಸದಿಂದ ಹಿಂದಿರುಗಿದವರು
1ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬೆಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು.2ಆಗ ಅವರ ಪಟ್ಟಣಗಳನ್ನೂ, ಸ್ವಾಸ್ತ್ಯವನ್ನೂ ಮೊದಲು ಸ್ವಾಧೀನಮಾಡಿಕೊಂಡವರು ಇಸ್ರಾಯೇಲ್ಯರು, ಯಾಜಕರು ಲೇವಿಯರು ಮತ್ತು ದೇವಾಲಯದ ಸೇವಕರು ಇವರೇ.3ಯೆಹೂದ್ಯರು, ಬೆನ್ಯಾಮೀನ್ಯರು ಎಫ್ರಾಯೀಮ್ಯರು, ಮನಸ್ಸೆಯರು ಯೆರೂಸಲೇಮಿನಲ್ಲಿ ವಾಸವಾಗಿದ್ದವರು.4ಯೆಹೂದ ಕುಲದ ಊತೈ ಅಮ್ಮೀಹೂದನ ಮಗ. ಅಮ್ಮಿಹೂದನು ಒಮ್ರಿಯ ಮಗ. ಇವನು ಇಮ್ರಿಯ, ಮಗ. ಇವನು ಬಾನಿಯ ಮಗ. ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.5ಶೇಲಾಹನ ಸಂತಾನದ ಚೊಚ್ಚಲು ಮಗನಾದ ಅಸಾಯ ಮತ್ತು ಅವನ ಮಕ್ಕಳು.6ಯೆಯೂವೇಲ್ ಜೆರಹನ ಸಂತಾನದವನು. ಇವನೂ ಇವನ ಸಹೋದರರೂ ಒಟ್ಟು ಆರುನೂರ ತೊಂಬತ್ತು ಜನರು.7ಬೆನ್ಯಾಮೀನ್ಯ ಕುಲದವರಲ್ಲಿ ಮೆಷುಲ್ಲಾಮನ ಮಗನೂ, ಹೋದವ್ಯನ ಮೊಮ್ಮಗನೂ, ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲು ಪ್ರಮುಖನಾದವನು.8ಯೆರೋಹಾಮನ ಮಗನಾದ ಇಬ್ನೆಯಾಹ; ಉಜ್ಜಿಯನ ಮಗನೂ ಮಿಕ್ರೀರಿಯ ಮೊಮ್ಮಗನೂ ಆದ ಏಲಾ, ಶೆಫಟ್ಯನ ಮಗನೂ ರೆಯೂವೇಲನ ಮೊಮ್ಮಗನೂ ಇಬ್ನಿಯನ ಮರಿಮಗನೂ ಆದ ಮೆಷುಲ್ಲಾಮ್ ಇವರೂ ಮತ್ತು ಇವರ ಸಹೋದರರೂ,9ಒಟ್ಟಿಗೆ ಒಂಬೈನೂರ ಐವತ್ತಾರು ಜನರು. ಇವರೆಲ್ಲರೂ ತಮ್ಮ ಗೋತ್ರಗಳಲ್ಲಿ ಪ್ರಧಾನಪುರುಷರು.ಯೆರೂಸಲೇಮಿನಲ್ಲಿ ನೆಲೆಸಿದ ಯಾಜಕರು
10ಯಾಜಕರಲ್ಲಿ ಯೆದಾಯ, ಯೆಹೋಯಾರೀಬ್, ಯಾಕೀನ್;11ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ.12ಯೆರೋಹಾಮನ ಮಗನಾದ ಅದಾಯ ಇವನೂ ಮತ್ತು ಇವನ ಸಹೋದರರೂ ಯೆರೋಹಾಮನು, ಪಶ್ಹೂರನ ಮಗ; ಇವನು ಮಲ್ಕೀಯನ ಮಗ, ಇವನು ಮಾಸೈಯನ ಮಗ. ಇವನು ಅದೀಯೇಲನ ಮಗ. ಇವನು ಯಹ್ಜೇರನ ಮಗ. ಇವನು ಮೆಷುಲ್ಲಾಮನ ಮಗ. ಇವನು ಮೆಷಿಲ್ಲೋಮೋತನ ಮಗ. ಇವನು ಇಮ್ಮೇರನ ಮಗ.13ಗೋತ್ರ ಪ್ರಧಾನರು ದೇವಾಲಯ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ, ಇವರ ಸಹೋದರರೂ ಒಟ್ಟು ಸಾವಿರದ ಏಳು ನೂರ ಅರವತ್ತು ಜನರು.ಯೆರೂಸಲೇಮಿನಲ್ಲಿ ನೆಲೆಸಿದ ಲೇವಿಯರು
14ಲೇವಿಯರಲ್ಲಿ ಹಷಬ್ಯನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಮೆರಾರೀ ಗೋತ್ರದವನೂ ಆದ ಶೆಮಾಯ15ಬಕ್ಬಕ್ಕರ್, ಹೆರೆಷ್, ಗಾಲಾಲ್, ಮೀಕನ ಮಗನೂ ಜಿಕ್ರೀಯ ಮೊಮ್ಮಗನೂ ಆಸಾಫನ ಮರಿಮಗನೂ ಆದ ಮತ್ತನ್ಯನು.16ಶೆಮಾಯನ ಮಗನೂ ಯೆದೂತೂನನ ಮರಿಮಗನೂ ಆದ ಓಬದ್ಯ. ನೆಟೋಫಾತ್ಯರ ಗ್ರಾಮಗಳಲ್ಲಿ ವಾಸವಾಗಿದ್ದ ಎಲ್ಕಾನನ ಮೊಮ್ಮಗನೂ ಆಸನ ಮಗನೂ ಆದ ಬೆರೆಕ್ಯ ಇವರೇ.ಯೆರೂಸಲೇಮಿನಲ್ಲಿ ನೆಲೆಸಿದ ದ್ವಾರಪಾಲಕರು
17ದ್ವಾರಪಾಲಕರಲ್ಲಿ ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್, ಇವರೂ ಮತ್ತು ಇವರ ಸಹೋದರರು. ಇವರಲ್ಲಿ ಶಲ್ಲೂಮನು ಪ್ರಮುಖನಾಗಿದ್ದನು.18ಶಲ್ಲೂಮರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು.19ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ, ಅವನ ಗೋತ್ರ ಬಂಧುಗಳಾದ ಮಿಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕ ಸೇವೆಗೆ ನೇಮಿಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶ ದ್ವಾರವನ್ನು ಕಾಯುವವರಾಗಿದ್ದರು.20ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.21ಮೆಷೆಲೆಮ್ಯನ ಮಗನಾದ ಜೆಕರೀಯನು ದೇವದರ್ಶನದ ಗುಡಾರ ದ್ವಾರಪಾಲಕನಾಗಿದ್ದನು.22ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಜನರು. ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಯಲ್ಲಿ ದಾಖಲಾಗಿದ್ದವು. ದಾವೀದನೂ, ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೊಗಕ್ಕೆ ನೇಮಿಸಿದರು.23ಅವರೂ ಅವರ ಮಕ್ಕಳೂ ಯೆಹೋವನ ಆಲಯದ, ಗುಡಾರದ ಬಾಗಿಲುಗಳನ್ನು ಕಾಯುತ್ತಿದ್ದರು.24ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಈ ದಿಕ್ಕುಗಳಲ್ಲಿರುವ ದೇವಾಲಯದ ಬಾಗಿಲುಗಳನ್ನು ಕಾಯುವವರಾಗಿದ್ದರು.25ಗ್ರಾಮಗಳಲ್ಲಿ ಇದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸ ಮಾಡುವುದಕ್ಕೊಸ್ಕರ ಸರದಿಯಂತೆ ಕ್ರಮದ ಪ್ರಕಾರವಾಗಿ ಮೇಲೆ ಏಳೇಳು ದಿನಗಳು ಬರಬೇಕಾಯಿತು.26ಲೇವಿಯರಾದ ಮೇಲ್ಕಂಡ ನಾಲ್ಕು ಜನರು ದ್ವಾರಪಾಲಕರ ಮುಖ್ಯಸ್ಥರಾಗಿ ದೇವಾಲಯದ ಕೋಣೆಗಳನ್ನೂ ಮತ್ತು ಭಂಡಾರಗಳನ್ನೂ ನೋಡಿಕೊಳ್ಳುವ ಜವಾಬ್ದಾರರಾಗಿದ್ದರು.27ಅವರು ರಾತ್ರಿಯಲ್ಲಿ ದೇವಾಲಯದ ಸುತ್ತಲೂ ಕಾವಲು ಕಾಯುತ್ತಿದ್ದರು. ಪ್ರತಿದಿನ ಬೆಳಿಗ್ಗೆ ದೇವಾಲಯದ ಬಾಗಿಲು ತೆರೆಯುತ್ತಿದ್ದರು.ಇತರ ಲೇವಿಯರು
28ಇದಲ್ಲದೆ ಅವರಲ್ಲಿ ಕೆಲವರು ಪೂಜಾ ಸಾಮಗ್ರಿಗಳನ್ನು ನೋಡಿಕೊಳ್ಳುವವರಾಗಿದ್ದರು. ಅವುಗಳನ್ನು ಕೊಡುವಾಗಲೂ ತಿರುಗಿ ತೆಗೆದುಕೊಳ್ಳುವಾಗಲೂ ಲೆಕ್ಕವಿರಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು.29ಇನ್ನು ಕೆಲವರು ದೇವಾಲಯದ ಎಲ್ಲಾ ವಸ್ತುಗಳ ಮೇಲ್ವಿಚಾರಕರೂ, ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.30ಯಾಜಕ ಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲವನ್ನು ಮಾಡುತ್ತಿದ್ದರು.31ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.32ಅವನ ಸಹೋದರರಾದ ಮಿಕ್ಕ ಕೆಹಾತ್ಯರಲ್ಲಿ ಕೆಲವರು ಪ್ರತಿ ಸಬ್ಬತ್ತಿನಲ್ಲಿ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಕೆಲಸವಿತ್ತು.33ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.34ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರ ಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.ಅರಸನಾದ ಸೌಲನ ವಂಶಾವಳಿ
35ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಯೂವೇಲನು ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.36ಅವನ ಚೊಚ್ಚಲ ಮಗ ಅಬ್ದೋನನು. ತರುವಾಯ ಹುಟ್ಟಿದವರು ಚೂರ್, ಕೀಷ್, ಬಾಳ್, ನೇರ್, ನಾದಾಬ್,37ಗೆದೋರ್, ಅಹ್ಯೋ, ಜೆಕರ್ಯ ಮತ್ತು ಮಿಕ್ಲೋತ್.38ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಂದ ಬೇರೆಯಾಗಿ ಯೆರೂಸಲೇಮಿನಲ್ಲಿರುವ ತಮ್ಮ ಕುಲಸಂಬಂಧಿಕರ ಜೊತೆಯಲ್ಲಿ ವಾಸಿಸುತ್ತಿದ್ದರು.39ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನನನ್ನೂ, ಮಲ್ಕೀಷೂವನನ್ನೂ, ಅಬೀನಾದಾಬನನ್ನೂ, ಎಷ್ಬಾಳನನ್ನು ಪಡೆದನು.40ಯೋನಾತಾನನು ಮೆರೀಬ್ಬಾಳನನ್ನು ಪಡೆದನು. ಮೆರೀಬ್ಬಾಳನು ಮೀಕನನ್ನು ಪಡೆದನು.41ಮೀಕನ ಮಕ್ಕಳು ಪೀತೋನ್, ಮೆಲೆಕ್, ತಹ್ರೇಯ ಮತ್ತು ಅಹಾಜ ಇವರೇ.42ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತ್, ಅಜ್ಮಾವೆತ್, ಜಿಮ್ರಿ ಇವರನ್ನು ಪಡೆದನು; ಜಿಮ್ರಿಯು ಮೋಚನನ್ನು ಪಡೆದನು.43ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯ; ಇವನ ಮಗ ಎಲ್ಲಾಸ; ಇವನ ಮಗ ಅಚೇಲ.44ಅಚೇಲನಿಗೆ ಆರು ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.
10ಸೌಲನ ಮರಣ
1ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಸತ್ತುಹೋದರು.2ಫಿಲಿಷ್ಟಿಯರು ಸೌಲನನ್ನೂ, ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನ್ನೂ, ಅಬೀನಾದಾಬನನ್ನೂ ಮತ್ತು ಮಲ್ಕೀಷೂವನನ್ನೂ ಕೊಂದರು.3ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹು ಘೋರವಾಗಿತ್ತು. ಬಿಲ್ಲುಗಾರರು ಅವನಿಗೆ ಗುರಿಯಿಟ್ಟರು.4ಆಗ ಸೌಲನು ತನ್ನ ಆಯುಧ ಹೊರುವವನಿಗೆ, <<ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು, ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನಗೆ ಅಪಕೀರ್ತಿ ತಂದಾರು>> ಎಂದು ಹೇಳಲು ಅವನು ಹೆದರಿ ಹಿಂಜರಿದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು, ಅದರ ಮೇಲೆ ಬಿದ್ದನು.5ಸೌಲನು ಸತ್ತದ್ದನ್ನು ಅವನ ಆಯುಧ ಹೊರುವವನು ಕಂಡು ತಾನೂ ತನ್ನ ಕತ್ತಿಯ ಮೇಲೆ ಬಿದ್ದು ಸತ್ತನು.6ಹೀಗೆ ಸೌಲನೂ, ಅವನ ಮೂರು ಮಕ್ಕಳೂ, ಅವನ ಮನೆಯವರೆಲ್ಲರೂ ಅದೇ ದಿನದಲ್ಲಿ ಸತ್ತರು.7ಇಸ್ರಾಯೇಲರು ಸೋತು ಹೋದರು. ಸೌಲನೂ, ಅವನ ಮಕ್ಕಳು ಸತ್ತರು ಎಂಬ ವರ್ತಮಾನವನ್ನು ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲರೆಲ್ಲರೂ ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಮಾಡಿದರು.8ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕಾಗಿ ಬಂದಾಗ, ಸೌಲನೂ ಅವನ ಮೂರು ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡರು.9ಫಿಲಿಷ್ಟಿಯರು ಸೌಲನಿಗಿರುವುದೆಲ್ಲವನ್ನು ಸುಲಿದುಕೊಂಡು ಅವನ ತಲೆಯನ್ನೂ, ಆಯುಧಗಳನ್ನೂ ತಮ್ಮ ದೇಶದ ಎಲ್ಲಾ ಕಡೆಗೆ ಕಳುಹಿಸಿ, ತಮ್ಮ ದೇವತೆಗಳಿಗೂ, ಜನರಿಗೂ ಜಯವಾರ್ತೆಯನ್ನು ಮುಟ್ಟಿಸಿದರು.10ಅವನ ಆಯುಧಗಳನ್ನು ತಮ್ಮ ದೇವಸ್ಥಾನದಲ್ಲಿಟ್ಟರು. ಅವನ ತಲೆಯನ್ನು ದಾಗೋನನ ಗುಡಿಯಲ್ಲಿ ನೇತುಹಾಕಿದರು.11ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನವು ಯಾಬೇಷ್ ಗಿಲ್ಯಾದವರಿಗೆ ಮುಟ್ಟಿತು.12ಆಗ ಅವರಲ್ಲಿರುವ ಶೂರರೆಲ್ಲರೂ ಹೊರಟುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಯಾಬೇಷಿಗೆ ತೆಗೆದುಕೊಂಡು ಬಂದು, ಅವರ ಎಲುಬುಗಳನ್ನು ಅಲ್ಲಿದ್ದ ಏಲಾ ಮರದ ಕೆಳಗೆ ಸಮಾಧಿ ಮಾಡಿ, ಏಳು ದಿನಗಳ ವರೆಗೆ ಉಪವಾಸ ಮಾಡಿದರು.13ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.14ಯೆಹೋವನು ಅವನನ್ನು ಕೊಲ್ಲಿಸಿ, ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು.
11ದಾವೀದನ ರಾಜಾಭಿಷೇಕ
1ಅನಂತರ ಇಸ್ರಾಯೇಲರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, <<ನಾವು ನಿನಗೆ ರಕ್ತಸಂಬಂಧಿಗಳಾಗಿದ್ದೇವೆ.2ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, <ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ> ಎಂದು ವಾಗ್ದಾನ ಮಾಡಿದ್ದಾನೆ.>> ಎಂದು ಹೇಳಿದರು.3ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.ದಾವೀದನು ಯೆರೂಸಲೇಮನ್ನು ಸ್ವಾಧೀನಮಾಡಿಕೊಂಡದ್ದೂ
4ದಾವೀದನು ಇಸ್ರಾಯೇಲರನ್ನು ಕರೆದುಕೊಂಡು ಅಂದಿನಕಾಲದಲ್ಲಿ ಯೆಬೂಸೆನಿಸಿಕೊಂಡಿದ್ದ ಯೆರೂಸಲೇಮಿಗೆ ಮುತ್ತಿಗೆ ಹಾಕಲು ಹೊರಟನು. ಆ ಪ್ರಾಂತ್ಯದ ಮೂಲನಿವಾಸಿಗಳು ಯೆಬೂಸಿಯರು.5ಯೆಬೂಸಿಯರು ದಾವೀದನಿಗೆ, <<ನೀನು ಒಳಗೆ ಬರಲು ಸಾಧ್ಯವಿಲ್ಲ>> ಎಂದು ಹೇಳಿದರು. ಆದರೂ ಅವನು ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಮಾಡಿಕೊಂಡನು.6ಆ ದಿನ ದಾವೀದನು ತನ್ನೊಂದಿಗೆ ಬಂದಿದ್ದ ಇಸ್ರಾಯೇಲರನ್ನು ಕುರಿತು <<ಯಾರು ಯೆಬೂಸಿಯರನ್ನು ಮೊದಲು ಸೋಲಿಸುವನೋ ಅವನು ದಳಾಧಿಪತಿ ಆಗುವನು>> ಎಂದು ಹೇಳಿದನು. ಚೆರೂಯಳ ಮಗನಾದ ಯೋವಾಬನು ಮೊದಲು ದಾಳಿ ಮಾಡಿದ್ದರಿಂದ ಅವನೇ ದಳಾಧಿಪತಿ ಆದನು.7ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದರಿಂದ ಅದಕ್ಕೆ ದಾವೀದನಗರ ಎಂದು ಹೆಸರಾಯಿತು.8ಅವನು ಮಿಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಭದ್ರಪಡಿಸಿದನು.9ಸೇನಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದುದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು.ದಾವೀದನ ರಣವೀರರು
10ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.11ದಾವೀದನ ಯುದ್ಧವೀರರ ಪಟ್ಟಿ: ಹಕ್ಮೋನಿಯನಾದ ಯಾಷೊಬ್ಬಾಮನು ಮೂವತ್ತು ಶೂರರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಒಂದೇ ಸಾರಿ ಮುನ್ನೂರು ಜನರನ್ನು ಕೊಂದನು.12ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಇವನೂ ಆ ಮೂವರು ಶೂರರಲ್ಲಿ ಒಬ್ಬನು.13ಫಿಲಿಷ್ಟಿಯರು ಪಸ್ದಮ್ಮೀಮಿನಲ್ಲಿ ಯುದ್ಧಕ್ಕೆ ಬಂದಾಗ ಇವನು ದಾವೀದನ ಜೊತೆಯಲ್ಲಿದ್ದನು. ಅಲ್ಲಿ ಒಂದು ಜವೆಗೋದಿಯ ಹೊಲವಿತ್ತು. ಇಸ್ರಾಯೇಲರು ಫಿಲಿಷ್ಟಿಯರಿಗೆ ಹೆದರಿ ಓಡಿಹೋಗಲು ಪ್ರಯತ್ನಿಸಿದಾಗ,14ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು.15ದಾವೀದನು ಅದುಲ್ಲಾಮ್ ಗಿರಿಯ ಗವಿಯಲ್ಲಿದ್ದಾಗ ಅವನ ಮೂವತ್ತು ಜನ ಪ್ರಸಿದ್ಧಶೂರರಲ್ಲಿ ಮೂವರು ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿರುವುದನ್ನು ಕಂಡರು.16ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಒಂದು ಕಾವಲು ದಂಡನ್ನು ಇಟ್ಟಿದ್ದರು. ಆಗ ದಾವೀದನು ದುರ್ಗದಲ್ಲಿದ್ದನು.17ದಾವೀದನು ಲವಲವಿಕೆಯಿಂದ, <<ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದು ಕೊಡುವುದಾದರೆ ಎಷ್ಟೋ ಒಳ್ಳೆಯದು>> ಎಂದು ಹೇಳಿದನು.18ಕೂಡಲೆ ಆ ಮೂವರು ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ, ಬೇತ್ಲೆಹೇಮ್ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.19ಆದರೆ ದಾವೀದನು <<ತಮ್ಮ ಜೀವವನ್ನು ಪರಿಗಣಿಸದೆ ಪರಾಕ್ರಮದಿಂದ ಈ ನೀರನ್ನು ತಂದು ಕೊಟ್ಟಿದ್ದಾರೆ. ಈ ನೀರನ್ನು ಕುಡಿದರೆ ಈ ಪರಾಕ್ರಮಶಾಲಿ ವೀರರ ರಕ್ತವನ್ನು ಕುಡಿದಂತೆ ಆಗುವುದು. ಇಂತಹ ಕಾರ್ಯವನ್ನು ನನ್ನಿಂದ ಆಗದಂತೆ ನನ್ನ ದೇವರು ತಡೆಯಲಿ>> ಎಂದು ಹೇಳುತ್ತಾ, ಆ ನೀರನ್ನು ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.20ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.21ಉಳಿದ ಇಬ್ಬರಿಗಿಂತ ಇವನೇ ಘನತೆಯುಳ್ಳವನಾಗಿದ್ದು ಅವರ ನಾಯಕನಾದನು. ಆದರೂ ಇವನು ಮೊದಲಿನ ಮೂರು ಜನರಿಗೆ ಸಮಾನನಾಗಿರಲಿಲ್ಲ.22ಅನೇಕ ಶೂರಕೃತ್ಯಗಳನ್ನು ನಡಿಸಿದ ಕಬ್ಜಯೇಲನವನಾದ ಪರಾಕ್ರಮಶಾಲಿಯ ಮೊಮ್ಮಗನೂ, ಯೆಹೋಯಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇನ್ನೂರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು, ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.23ಮತ್ತೊಮ್ಮೆ ಏಳುವರೆ ಅಡಿ ಎತ್ತರದ ಅತಿ ಬಲವಾದ ಈಟಿಯನ್ನು ಹೊಂದಿದ್ದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿದ್ದ ಈಟಿಯು ನೇಕಾರರ ಕುಂಟೆಯಂತಿತ್ತು. ಆದರೆ ಇವನ ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.24ಈ ಪರಾಕ್ರಮ ಕೃತ್ಯದಿಂದ ಯೆಹೋಯಾದನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.25ಮೂವತ್ತು ಜನರಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.26ಯುದ್ಧವೀರರ ಇನ್ನೊಂದು ಪಟ್ಟಿ: ಯೋವಾಬನ ತಮ್ಮನಾದ ಅಸಾಹೇಲನು, ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಖಾನಾನ್,27ಹರೋರಿನವನಾದ ಶಮ್ಮೋತ್, ಪೆಲೋನ್ಯನಾದ ಹೆಲೆಚ್,28ತೆಕೋವದ ಇಕ್ಕೇಷನ ಮಗನಾದ ಈರ, ಅನತೋತಿನವನಾದ ಅಬೀಯೆಜೆರ,29ಹುಷ ಊರಿನವನಾದ ಸಿಬ್ಬೆಕೈ, ಅಹೋಹಿನವನಾದ ಈಲೈ,30ನೆಟೋಫದವನಾದ ಮಹರೈ ಮತ್ತು ಬಾಣನ ಮಗನಾದ ಹೇಲೆದ್,31ಬೆನ್ಯಾಮೀನ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಈತೈ. ಪಿರಾತೋನ್ಯನಾದ ಬೆನಾಯ,32ಹಲೇಗಾಷಿನವನಾದ ಹೂರೈ, ಅರಾಬಾ ತಗ್ಗಿನವನಾದ ಅಬೀಯೇಲ್,33ಬಹರೂಮ್ಯನಾದ ಅಜ್ಮಾವೆತ್, ಶಾಲ್ಬೋನ್ಯನಾದ ಎಲೆಯಖ್ಬ.34ಗೀಜೋನ್ಯನಾದ ಹಾಷೇಮನ ಮಕ್ಕಳು, ಹರಾರ್ಯನಾದ ಶಾಗೇಯನ ಮಗ, ಯೋನಾತಾನ,35ಹರಾರ್ಯನಾದ ಶಾಕಾರನ ಮಗ ಅಹೀಯಾಮ್, ಊರನ ಮಗನಾದ ಎಲೀಫಲ್,36ಮೆಕೆರಾತ್ಯನಾದ ಹೇಫೆರ್, ಪೆಲೋನ್ಯನಾದ ಅಹೀಯ,37ಕರ್ಮೆಲ್ಯನಾದ ಹಚ್ರೋ, ಎಜ್ಬೈಯ ಮಗನಾದ ನಾರೈ,38ನಾತಾನನ ತಮ್ಮನಾದ ಯೋವೇಲ್, ಹಗ್ರೀಯನ ಮಗನಾದ ಮಿಬ್ಹಾರ,39ಅಮ್ಮೋನಿಯನಾದ ಚೆಲೆಕ್ ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನೂ ಆಯುಧ ಹೊರುವವನು ಆಗಿದ್ದ ನಹರೈ,40ಇತ್ರೀಯರಾದ ಈರ, ಗಾರೇಬರು,41ಹಿತ್ತಿಯನಾದ ಊರೀಯ, ಅಹ್ಲೈಯ ಮಗನಾದ ಜಾಬಾದ್,42ರೂಬೇನ್ಯನೂ ತನ್ನ ಜೊತೆಯಲ್ಲಿ ಬಂದ ಮೂವತ್ತು ಜನರು. ರೂಬೇನ್ಯರ ಮುಖ್ಯಸ್ಥನೂ ಶೀಜನ ಮಗನೂ ಆದ ಅದೀನ43ಮಾಕನ ಮಗನಾದ ಹಾನಾನ್, ಮೆತೆನ ಊರಿನವನಾದ ಯೋಷಾಫಾಟ್,44ಅಷ್ಟೆರಾತ್ಯನಾದ ಉಜ್ಜೀಯ, ಅರೋಯೇರಿನ ಹೋತಾಮನ ಮಕ್ಕಳಾದ ಶಾಮಾ ಯೆಗೀಯೇಲರು,45ಶಿಮ್ರಿಯ ಮಗನಾದ ಎದೀಗಯೇಲ್, ಎದೀಗೇಲನ ತಮ್ಮನೂ ತೀಚೀಯನೂ ಆದ ಯೋಹ,46ಎಲ್ನಾಮನ ಮಕ್ಕಳಾದ ಮಹವೀಯನಾದ ಎಲೀಯೇಲ್, ಯೆರೀಬೈ ಮತ್ತು ಯೋಷವ್ಯರು. ಮೋವಾಬ್ಯನಾದ ಇತ್ಮ,47ಎಲೀಯೇಲ್ ಓಬೇದರು, ಮೆಚೋಬಾಯದವನಾದ ಯಾಸೀಯೇಲನು ಇವರೇ.
12ದಾವೀದನನ್ನು ಸೇರಿಕೊಂಡ ಬೆನ್ಯಾಮೀನ್ಯರು
1ದಾವೀದನು ಕೀಷನ ಮಗನಾದ ಸೌಲನಿಗೆ ಹೆದರಿ ಚಿಕ್ಲಗಿನಲ್ಲಿ ಅಡಗಿಕೊಂಡಿದ್ದಾಗ2ಬಿಲ್ಲುಗಾರರೂ, ಎಡಗೈ ಬಲಗೈಗಳಿಂದ ಕಲ್ಲುಗಳನ್ನೂ ಮತ್ತು ಬಾಣಗಳನ್ನೂ ಎಸೆಯಬಲ್ಲವರೂ ಆಗಿದ್ದು ಯುದ್ಧದಲ್ಲಿ ಸಹಾಯಮಾಡುವುದಕ್ಕಾಗಿ ಅವನ ಬಳಿಗೆ ಬಂದ ಯುದ್ಧವೀರರ ಪಟ್ಟಿ.3ಸೌಲನ ಕುಲಬಂಧುಗಳಾದ ಬೆನ್ಯಾಮೀನ್ಯರಲ್ಲಿ ಮುಖ್ಯಸ್ಥನಾದ ಅಹೀಯೆಜೆರ್ ಮತ್ತು ಯೋವಾಷ ಎಂಬ ಗಿಬೆಯ ಊರಿನ ಹಷ್ಷೆಮಾಹನ ಮಕ್ಕಳು. ಅಜ್ಮಾವೆತನ ಮಕ್ಕಳಾದ ಯೆಜೀಯೇಲ್ ಪೆಲೆಟರು. ಅನತೋತ್ ಊರಿನವರಾದ ಯೇಹು ಬೇರಾಕಾರು,4ಮೂವತ್ತು ಭಟರಲ್ಲಿ ಶೂರನು ಮುಖ್ಯಸ್ಥನು ಆದ ಗಿಬ್ಯೋನಿನ ಇಷ್ಮಾಯ, ಗೆದೇರಾ ಊರಿನವರಾದ ಯೆರೆಮೀಯ ಯಹಜೀಯೇಲ್, ಯೋಹಾನಾನ್, ಯೋಜಾಬಾದರು,5ಹರೀಫ್ಯರಾದ ಎಲ್ಲೂಜೈ, ಯೆರೀಮೋತ್, ಬೆಯಲ್ಯ, ಶೆಮರ್ಯ, ಶೆಫಟ್ಯರು,6ಕೋರಹಿಯರಾದ ಎಲ್ಕಾನ್, ಇಷ್ಷೀಯ, ಅಜರೇಲ್, ಯೋವೆಜೆರ್, ಯಾಷೊಬ್ಬಾಮರು,7ಗೆದೋರಿನ ಯೆರೋಹಾಮನ ಮಕ್ಕಳಾದ ಯೋವೇಲ ಮತ್ತು ಜೆಬದ್ಯರು ಇವರೇ.ದಾವೀದನನ್ನು ಹಿಂಬಾಲಿಸಿದ ಗಾದ್ಯರು
8ಯುದ್ಧವೀರರೂ ಯುದ್ಧನಿಪುಣರೂ, ಗುರಾಣಿಬರ್ಜಿಗಳಲ್ಲಿ ಪ್ರವೀಣರೂ, ಸಿಂಹಮುಖರೂ, ಬೆಟ್ಟದ ಜಿಂಕೆಯಂತೆ ಓಡುವ ಚುರುಕು ಕಾಲಿನವರು ಆಗಿದ್ದು, ದಾವೀದನು ಅರಣ್ಯ ದುರ್ಗದಲ್ಲಿದ್ದಾಗ ಅವನನ್ನು ಸೇರಿಕೊಂಡ ಗಾದ್ಯರು:9ಮುಖ್ಯಸ್ಥನು ಏಜೆರ್, ಎರಡನೆಯವನು ಓಬದ್ಯ, ಮೂರನೆಯವನು ಎಲೀಯಾಬ್,10ನಾಲ್ಕನೆಯವನು ಮಷ್ಮನ್ನ, ಐದನೆಯವನು ಯೆರೆಮೀಯ,11ಆರನೆಯವನು ಅತ್ತೈ, ಏಳನೆಯವನು ಎಲೀಯೇಲ್,12ಎಂಟನೆಯವನು ಯೋಹಾನಾನ್, ಒಂಬತ್ತನೆಯವನು ಎಲ್ಜಾಬಾದ್,13ಹತ್ತನೆಯವನು ಯೆರೆಮೀಯನು, ಹನ್ನೊಂದನೆಯವನು ಮಕ್ಬನ್ನೈ ಇವರೇ.14ಗಾದ್ಯರಾದ ಇವರು ಸೇನಾಧಿಪತಿಗಳಾಗಿದ್ದರು. ಇವರಲ್ಲಿ ಕನಿಷ್ಠನಾದವನು ನೂರು ಜನರ ಮೇಲೆಯೂ, ಶ್ರೇಷ್ಠನಾದವನು ಸಾವಿರ ಜನರ ಮೇಲೆಯೂ ಇದ್ದರು.15ಯೊರ್ದನ್ ನದಿಯು ಮೊದಲನೆಯ ತಿಂಗಳಿನಲ್ಲಿ ದಡ ತುಂಬಿ ಹರಿಯುತ್ತಿರುವಾಗ, ಇವರು ಅದನ್ನು ದಾಟಿ ನದಿಯ ತಗ್ಗಿನ ಪೂರ್ವ ಮತ್ತು ಪಶ್ಚಿಮ ಪ್ರದೇಶದಲ್ಲಿರವ ಎಲ್ಲರನ್ನೂ ಓಡಿಸಿಬಿಟ್ಟರು.ದಾವೀದನನ್ನು ಹಿಂಬಾಲಿಸಿದ ಯೂದ ಕುಲದವರು
16ಬೆನ್ಯಾಮೀನ್ ಮತ್ತು ಯೂದ ಕುಲದವರಲ್ಲಿ ಕೆಲವರು ದಾವೀದನಿದ್ದ ದುರ್ಗದ ಬಳಿಗೆ ಬರಲು ದಾವೀದನು ಹೊರಗೆ ಹೋಗಿ ಅವರೆದುರಿಗೆ ನಿಂತು ಅವರಿಗೆ,17<<ನೀವು ಸ್ನೇಹಭಾವದಿಂದ ಸಹಾಯ ಮಾಡುವುದಕ್ಕಾಗಿ ನನ್ನ ಬಳಿಗೆ ಬಂದಿರುವುದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವುದು. ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವುದಾದರೆ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ನೋಡಿ ದಂಡಿಸಲಿ>> ಎಂದು ಹೇಳಿದನು.18ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, <<ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ>> ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.19ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, <<ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು>> ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.20ಅವನು ಹಿಂತಿರುಗಿ ಚಿಕ್ಲಗಿಗೆ ಹೋಗುವಾಗ ಮನಸ್ಸೆ ಕುಲದ ಸಹಸ್ರಾಧಿಪತಿಗಳಾದ ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹು ಮತ್ತು ಚಿಲ್ಲೆತೈ ಎಂಬುವರು ಬಂದು ಅವನೊಂದಿಗೆ ಸೇರಿಕೊಂಡರು.21ಯುದ್ಧವೀರರೂ, ಸೇನಾಧಿಪತಿಗಳೂ ಆದ ಇವರೆಲ್ಲರೂ ಸುಲಿಗೆ ಗುಂಪುಗಳಿಗೆ ವಿರೋಧವಾಗಿ ದಾವೀದನಿಗೆ ಸಹಾಯಮಾಡುವವರಾದರು.22ದಾವೀದನ ಸಹಾಯಕ್ಕೆ ಪ್ರತಿದಿನವೂ ಹೊಸ ಗುಂಪುಗಳು ಬರುತ್ತಿದ್ದವು. ಅವನ ಸೈನ್ಯವು ದೇವರ ಸೈನ್ಯದಷ್ಟು ದೊಡ್ಡದಾಯಿತು.ದಾವೀದನ ಪಟ್ಟಾಭಿಷೇಕಕ್ಕೋಸ್ಕರ ಹೆಬ್ರೋನಿಗೆ ಬಂದ ಭಟರು
23ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವುದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪುಗುಂಪುಗಳಾಗಿ ಬಂದ ಯುದ್ಧಸನ್ನದ್ಧರಾಗಿದ್ದವರ ಲೆಕ್ಕ;24ಯೆಹೂದ್ಯರಿಂದ ಬರ್ಜಿ, ಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟನೂರು.25ಸಿಮೆಯೋನ್ಯರಿಂದ ಏಳು ಸಾವಿರದ ನೂರು ಯುದ್ಧವೀರರು.26ಲೇವಿಯರಿಂದ ನಾಲ್ಕು ಸಾವಿರದ ಆರುನೂರು ಸೈನಿಕರಲ್ಲದೆ,27ಆರೋನ್ಯರ ಮುಖ್ಯಸ್ಥನಾದ ಯೆಹೋಯಾದಾವನೂ ಮತ್ತು ಅವನ ಮೂರು ಸಾವಿರದ ಏಳು ನೂರು ಸೈನಿಕರೂ;28ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ, ಅವನ ಕುಟುಂಬದವರಾದ ಇಪ್ಪತ್ತೆರಡು ಅಧಿಪತಿಗಳೂ,29ಸೌಲನ ಸಂಬಂಧಿಕರಾದ ಬೆನ್ಯಾಮೀನ್ಯರಲ್ಲಿ ಮೂರು ಸಾವಿರ ಸೈನಿಕರು ಬಂದರು. ಬೆನ್ಯಾಮೀನ್ಯರಲ್ಲಿ ಹೆಚ್ಚಿನ ಭಾಗದವರು ಸೌಲನ ಮನೆಯವರೊಂದಿಗೆ ಸೇರಿಕೊಂಡಿದ್ದರು.30ಎಫ್ರಾಯೀಮಿನ ಆಯಾ ಗೋತ್ರಗಳಲ್ಲಿ ಪ್ರಸಿದ್ಧರಾದ ಇಪ್ಪತ್ತು ಸಾವಿರದ ಎಂಟುನೂರು ಮಹಾಯುದ್ಧವೀರರು,31ಮನಸ್ಸೆಯ ಅರ್ಧ ಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇಮಿಸಲ್ಪಟ್ಟವರು ಹದಿನೆಂಟು ಸಾವಿರ ಸೈನಿಕರು.32ಇಸ್ಸಾಕಾರ್ಯರಿಂದ ಇನ್ನೂರು ಮುಖ್ಯಸ್ಥರು. ಇವರು ಸಮಯೋಚಿತಜ್ಞಾನವುಳ್ಳವರಾಗಿ ಇಸ್ರಾಯೇಲರು ಮಾಡತಕ್ಕದ್ದನ್ನು ಅರಿತವರಾಗಿದ್ದರು. ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಬದ್ಧರಾಗಿದ್ದರು.33ಜೆಬುಲೂನ್ಯರಿಂದ ಯುದ್ಧಪ್ರವೀಣರೂ, ಸರ್ವಾಯುಧಗಳನ್ನು ಧರಿಸಿ ವ್ಯೂಹಕಟ್ಟ ಬಲ್ಲವರೂ, ದೃಢಚಿತ್ತರೂ ಆದರು ಐವತ್ತು ಸಾವಿರ ಸೈನಿಕರು.34ನಫ್ತಾಲಿಯರಿಂದ ಸಾವಿರ ನಾಯಕರೂ, ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂವತ್ತೇಳು ಸಾವಿರ ಸೈನಿಕರೂ,35ದಾನ್ಯರಿಂದ ಇಪ್ಪತ್ತೆಂಟು ಸಾವಿರದ ಆರುನೂರು ಯುದ್ಧನಿಪುಣರು.36ಆಶೇರ್ಯರಿಂದ ಯುದ್ಧಕ್ಕೆ ಸಿದ್ಧರಾದ ನಲ್ವತ್ತು ಸಾವಿರ ಯುದ್ಧನಿಪುಣರು,37ಯೊರ್ದನಿನ ಆಚೆಯಲ್ಲಿದ್ದ ರೂಬೇನ್, ಗಾದ್, ಅರ್ಧಮನಸ್ಸೆ ಕುಲಗಳಿಂದ ಸರ್ವಾಯುದ್ಧಧಾರಿಗಳಾದ ಒಂದು ಲಕ್ಷದ ಇಪ್ಪತ್ತು ಸಾವಿರ ಸೈನಿಕರು.38ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು.39ಅವರು ಅಲ್ಲಿ ಮೂರು ದಿನ ದಾವೀದನ ಸಂಗಡ ಇದ್ದು ಅನ್ನ ಪಾನಗಳನ್ನು ತೆಗೆದುಕೊಂಡರು. ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.40ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.
13ಮಂಜೂಷವನ್ನು ಕಿರ್ಯಾತ್ಯಾರೀಮಿನಿಂದ ತಂದದ್ದು ಮತ್ತು ಸಂಭವಿಸಿದ ಆಪತ್ತು
1ದಾವೀದನು ಸಹಸ್ರಾಧಿಪತಿ, ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಸಮಾಲೋಚನೆ ಮಾಡಿದ ನಂತರ ಇಸ್ರಾಯೇಲ್ಯರ ಸಮಸ್ತ ಸಮೂಹದವರಿಗೆ,2<<ನಿಮ್ಮ ಸಮ್ಮತಿಯೂ ಮತ್ತು ನಮ್ಮ ದೇವರಾದ ಯೆಹೋವನ ಚಿತ್ತವೂ ಇರುವುದಾದರೆ, ನಾವು ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿರುವ ನಮ್ಮ ಸಹೋದರರನ್ನೂ ಗೋಮಾಳಸಹಿತವಾದ ತಮ್ಮ ಪಟ್ಟಣಗಳಲ್ಲಿರುವ ಯಾಜಕ ಲೇವಿಯರನ್ನೂ ಬೇಗನೆ ಕರೆಕಳುಹಿಸೋಣ.3ಅವರು ನಮ್ಮ ಬಳಿಗೆ ಕೂಡಿ ಬಂದ ಮೇಲೆ ನಾವು ಸೌಲನ ಕಾಲದಲ್ಲಿ ಅಲಕ್ಷ್ಯಮಾಡಿದ್ದ ನಮ್ಮ ದೇವರ ಮಂಜೂಷವನ್ನು ತೆಗೆದುಕೊಂಡು ಬರೋಣ>> ಎಂದು ಹೇಳಿದನು.4ಅವರೆಲ್ಲರೂ ಆ ಮಾತಿಗೆ ಒಪ್ಪಿ ಅದರಂತೆ ಮಾಡಬೇಕೆಂದು ಹೇಳಿದರು.5ಆಗ ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತರುವುದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯ ವರೆಗೂ ವಾಸಿಸುತ್ತಿದ್ದ6ಎಲ್ಲಾ ಇಸ್ರಾಯೇಲ್ಯರನ್ನು ಒಟ್ಟಿಗೆ ಸೇರಿಸಿ ಅವರೆಲ್ಲರೊಡನೆ, ಯೆಹೂದ ದೇಶದ ಬಾಳಾ ಎನ್ನಿಸಿಕೊಳ್ಳುತ್ತಿದ್ದ ಕಿರ್ಯತ್ಯಾರೀಮಿಗೆ ಹೋದನು. ಆ ಮಂಜೂಷವು ಕೆರೂಬಿಯರ ನಡುವೆ ಆಸೀನನಾಗಿರುವ ಯೆಹೋವ ದೇವರ ನಾಮದಿಂದ ಪ್ರಸಿದ್ಧವಾಗಿತ್ತು.7ಅವರು ದೇವರ ಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು, ಒಂದು ಹೊಸ ಬಂಡಿಯ ಮೇಲೆ ಇಟ್ಟರು. ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಓಡಿಸಿದರು.8ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ ಮಾಡುತ್ತಾ ಹೋದರು.9ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈ ಚಾಚಿ ದೇವರ ಮಂಜೂಷವನ್ನು ಹಿಡಿದನು.10ಉಜ್ಜನು ಮಂಜೂಷದ ಮೇಲೆ ಕೈಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು. ಅವನು ಅಲ್ಲೇ ದೇವರ ಸನ್ನಿಧಿಯಲ್ಲಿ ಸತ್ತನು.11ಯೆಹೋವನಿಂದ ಉಜ್ಜನು ಮರಣ ಹೊಂದಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಇದೇ ಹೆಸರಿರುತ್ತದೆ.12ಆ ದಿನ ದಾವೀದನು ದೇವರಿಗೆ ಭಯಪಟ್ಟು, <<ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ>> ಎಂದುಕೊಂಡು13ಮಂಜೂಷವನ್ನು ದಾವೀದ ನಗರಕ್ಕೆ ತಾರದೇ, ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.14ದೇವರ ಮಂಜೂಷವು ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಓಬೇದೆದೋಮನ ಮನೆಯನ್ನೂ ಮತ್ತು ಅವನಿಗಿದ್ದ ಸರ್ವಸ್ವವನ್ನೂ ಆಶೀರ್ವದಿಸಿದನು.
14ದಾವೀದನು ಅರಮನೆಯನ್ನು ಕಟ್ಟಿಸಿಕೊಂಡದ್ದು
1ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನೂ, ದೇವದಾರುಮರಗಳನ್ನೂ, ಶಿಲ್ಪಿಗಳನ್ನೂ ಮತ್ತು ಬಡಗಿಗಳನ್ನು ಅವನ ಬಳಿಗೆ ಕಳುಹಿಸಿದನು.2ಇದರಿಂದ ದಾವೀದನು ದೇವರ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ತನ್ನ ರಾಜ್ಯವು ಉನ್ನತ ಸ್ಥಾನಕ್ಕೆ ಮುಟ್ಟಿದ್ದನ್ನು ನೋಡಿ ಯೆಹೋವನು ತನ್ನನ್ನು ಇಸ್ರಾಯೇಲರಿಗೆ ರಾಜನನ್ನಾಗಿ ಸ್ಥಿರಪಡಿಸಿದನೆಂದು ತಿಳಿದುಕೊಂಡನು.3ದಾವೀದನು ಯೆರೂಸಲೇಮಿನಲ್ಲಿಯೂ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡು ಇನ್ನೂ ಕೆಲವು ಗಂಡು ಹೆಣ್ಣು ಮಕ್ಕಳನ್ನು ಪಡೆದನು.4ಅಲ್ಲಿ ಅವನಿಗೆ ಹುಟ್ಟಿದ ಗಂಡು ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,5ಇಬ್ಹಾರ್, ಎಲೀಷೂವ, ಎಲ್ಪೆಲೆಟ್,6ನೋಗಹ, ನೆಫೆಗ್, ಯಾಫೀಯ,7ಎಲೀಷಾಮ್, ಬೇಲ್ಯಾದ ಮತ್ತು ಎಲೀಫೆಲೆಟ್.ಫಿಲಿಷ್ಟಿಯರ ಮೇಲೆ ದಾವೀದನ ವಿಜಯ
8ಇಸ್ರಾಯೇಲ್ಯರೆಲ್ಲರೂ ದಾವೀದನನ್ನು ಅಭಿಷೇಕಿಸಿ ಅವನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ತಾನೂ ಅವರನ್ನೆದುರಿಸಲು ಹೋದನು.9ಫಿಲಿಷ್ಟಿಯರು ದೇಶದೊಳಗೆ ನುಗ್ಗಿ, ರೆಫಾಯೀಮ್ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು.10ದಾವೀದನು ದೇವರಾದ ಯೆಹೋವನನ್ನು, <<ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ>> ಎಂದು ಕೇಳಿದನು. ಅದಕ್ಕೆ ಯೆಹೋವನು, <<ಹೋಗು ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು>> ಎಂದು ಉತ್ತರ ಕೊಟ್ಟನು.11ಅಷ್ಟರಲ್ಲಿ ಬಾಳ್ ಪೆರಾಚೀಮಿಗೆ ಬಂದ ಅವರನ್ನು ದಾವೀದನು ಸೋಲಿಸಿ, <<ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಮುಖಾಂತರವಾಗಿ ನಾಶಮಾಡಿದ್ದಾನೆ>> ಎಂದು ಹೇಳಿದ್ದರಿಂದ ಆ ಯುದ್ಧ ಸ್ಥಳಕ್ಕೆ ಬಾಳ್ ಪೆರಾಚೀಮ್ ಎಂದು ಹೆಸರಾಯಿತು.12ಫಿಲಿಷ್ಟಿಯರು ಅಲ್ಲಿ ಬಿಟ್ಟುಹೋಗಿದ್ದ ದೇವರುಗಳನ್ನು ಸುಟ್ಟುಬಿಡುವಂತೆ ದಾವೀದನು ಅಪ್ಪಣೆ ಕೊಟ್ಟನು.13ಫಿಲಿಷ್ಟಿಯರು ಮತ್ತೊಮ್ಮೆ ಬಂದು ಅದೇ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು.14ದಾವೀದನು ಪುನಃ ದೇವರ ಸನ್ನಿಧಿಯಲ್ಲಿ ವಿಚಾರಿಸಿದಾಗ ಯೆಹೋವನು ಅವನಿಗೆ, <<ನೀನು ಅವರನ್ನು ಬೆನ್ನಟ್ಟಬೇಡ, ಅವರ ಎದುರುಗಡೆಯಿಂದ ದಾಳಿಮಾಡದೆ ಹಿಂತಿರುಗಿ ಹೋಗಿ ಬಾಕಾಮರಗಳಿರುವ ಕಡೆಯಿಂದ ಅವರ ಮೇಲೆ ದಾಳಿಮಾಡು.15ಬಾಕಾಮರಗಳ ತುದಿಯಲ್ಲಿ ಹೆಜ್ಜೆಗಳ ಶಬ್ದವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನನ್ನು ಮುನ್ನಡೆಸುತ್ತಿದ್ದಾನೆ ಎಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು>> ಎಂದನು.16ದಾವೀದನು ದೇವರ ಆಜ್ಞಾನುಸಾರವಾಗಿ ಮಾಡಿದನು. ಇಸ್ರಾಯೇಲರು ಫಿಲಿಷ್ಟಿಯರ ಸೈನ್ಯವನ್ನು ಗಿಬ್ಯೋನಿನಿಂದ ಗೆಜೆರಿನ ವರೆಗೂ ಸಂಹರಿಸುತ್ತಾ ಹೋದರು.17ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರಿ ನಡೆಯುವಂತೆ ಮಾಡಿದನು.
15ಯೆಹೋವನ ಮಂಜೂಷವನ್ನು ಯೆರೂಸಲೇಮಿಗೆ ತಂದದ್ದು
1ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವರ ಮಂಜೂಷಕ್ಕಾಗಿಯೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು.2ಆ ಕಾಲದಲ್ಲಿ ದಾವೀದನು, <<ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ>> ಎಂದು ಹೇಳಿದನು.3ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.4ದಾವೀದನು ಕರೆಯಿಸಿದ ಆರೋನನ ವಂಶದವರು, ಲೇವಿಯರು,5ಕೆಹಾತ್ಯರಲ್ಲಿ ಊರೀಯೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರಿಪ್ಪತ್ತು ಜನರು,6ಮೆರಾರೀಯರಲ್ಲಿ ಅಸಾಯನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಇನ್ನೂರಿಪ್ಪತ್ತು ಜನರು,7ಗೇರ್ಷೋಮ್ಯರಲ್ಲಿ ಯೋವೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರಮೂವತ್ತು ಜನರು,8ಎಲೀಚಾಫಾನ್ಯರಲ್ಲಿ ಶೆಮಾಯನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಇನ್ನೂರು ಜನರು,9ಹೆಬ್ರೋನ್ಯರಲ್ಲಿ ಎಲೀಯೇಲನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ಎಂಭತ್ತು ಜನರು10ಉಜ್ಜೀಯೇಲ್ಯರಲ್ಲಿ ಅಮ್ಮೀನಾದಾಬನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರ ಹನ್ನೆರಡು ಜನರೊಂದಿಗೆ ಬಂದನು.11ಆ ಮೇಲೆ ದಾವೀದನು ಚಾದೋಕ್, ಎಬ್ಯಾತಾರ್ ಎಂಬ ಯಾಜಕರನ್ನೂ, ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್ ಎಂಬ ಲೇವಿಯರನ್ನು ಕರೆದು ಅವರಿಗೆ, <<ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವು,12ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.13ನೀವು ಮೊದಲನೆಯ ಸಾರಿ ಇರಲಿಲ್ಲವಾದುದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ನಮ್ಮಲ್ಲಿಗೆ ಬಂದ ಒಬ್ಬನನ್ನು ಸಂಹರಿಸಿದನು>> ಎಂದು ಹೇಳಿದನು.14ಆಗ ಯಾಜಕರೂ ಮತ್ತು ಲೇವಿಯರೂ ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ತರುವುದಕ್ಕೋಸ್ಕರ ತಮ್ಮನ್ನು ಶುದ್ಧಪಡಿಸಿಕೊಂಡರು.15ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವರ ಮಂಜೂಷವನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದರು.16ಆಗ ದಾವೀದನು ಲೇವಿಯರ ಪ್ರಧಾನರಿಗೆ, <<ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹಧ್ವನಿ ಮಾಡುವುದಕ್ಕಾಗಿ ನೇಮಿಸಿರಿ>> ಎಂದು ಆಜ್ಞಾಪಿಸಿದನು.17ಆಗ ಅವರು ಯೋವೇಲನ ಮಗನಾದ ಹೇಮಾನ್, ಅವನ ಗೋತ್ರಬಂಧುವೂ ಬೆರೆಕ್ಯನ ಮಗನೂ ಆದ ಆಸಾಫ್, ತಮ್ಮ ಸಹೋದರರಾದ ಮೆರಾರೀಯರ ಕುಟುಂಬಕ್ಕೆ ಸೇರಿದ ಕೂಷಾಯನ ಮಗನಾದ ಏತಾನ್ ಎಂಬುವರನ್ನಲ್ಲದೆ,18ತಮ್ಮ ಸಹೋದರರೊಳಗೆ ಎರಡನೆಯ ದರ್ಜೆಯವರಾದ ಜೆಕರ್ಯ, ಬೇನ್, ಯಾಜೀಯೇಲ್ ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ ಎಲೀಫೆಲೇಹು, ಮಿಕ್ನೇಯ ದ್ವಾರಪಾಲಕರಾದ ಓಬೇದೆದೋಮ ಮತ್ತು ಯೆಗೀಯೇಲ್ ಇವರನ್ನು ನೇಮಿಸಿದನು.19ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನರು ಗಟ್ಟಿಯಾಗಿ ಕಂಚಿನ ತಾಳಗಳನ್ನು ಬಾರಿಸಿವವರು.20ಜೆಕರ್ಯ, ಅಜೀಯೇಲ್, ಶೆಮೀರಾಮೋತ್, ಯೆಹೀಯೇಲ್,, ಉನ್ನೀ, ಎಲೀಯಾಬ್, ಮಾಸೇಯ ಮತ್ತು ಬೆನಾಯ ಎಂಬುವವರು ತಾರಕಸ್ಥಾಯಿಯ ಸ್ವರಮಂಡಲಗಳನ್ನು ಬಾರಿಸುವವರು.21ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ದ್ವಾರಪಾಲಕರಾದ ಓಬೇದೆದೋಮ ಯೆಗೀಯೇಲರು ಅಹಜ್ಯ ಎಂಬವರು ಗಾಯಕ ನಾಯಕರಾಗಿದ್ದು ಮಂದರಸ್ಥಾಯಿಯ ಕಿನ್ನರಿಗಳನ್ನು ನುಡಿಸುವವರನ್ನು ನೆಮಿಸಿಕೊಂಡನು.22ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಲೇವಿಯರಲ್ಲಿ ನಾಯಕನೂ ಆಗಿದ್ದ ಕೆನನ್ಯನು ಮಂಜೂಷ ಹೊತ್ತವರಿಗೆ ಮೇಲ್ವಿಚಾರಕನಾಗಿದ್ದನು.23ಬೆರೆಕ್ಯ ಮತ್ತು ಎಲ್ಕಾನ ಇವರು ಮಂಜೂಷದ ದ್ವಾರಪಾಲಕರಾಗಿದ್ದರು.24ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಎಂಬ ಯಾಜಕರು ತುತ್ತೂರಿಗಳನ್ನು ಊದುತ್ತಾ ದೇವ ಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್ ಮತ್ತು ಯೆಹೀಯ ಎಂಬುವವರು ಮಂಜೂಷದ ದ್ವಾರಪಾಲಕರಾಗಿದ್ದರು.25ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಮತ್ತು ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ಒಡಂಬಡಿಕೆ ಮಂಜೂಷವನ್ನು ಉತ್ಸಾಹದಿಂದ ತರುತ್ತಿರುವಾಗ,26ಯೆಹೋವನ ಒಡಂಬಡಿಕೆ ಮಂಜೂಷವನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದ್ದರಿಂದ ಏಳು ಹೋರಿಗಳನ್ನೂ ಮತ್ತು ಏಳು ಟಗರುಗಳನ್ನೂ ಯಜ್ಞಮಾಡಿದರು.27ದಾವೀದನೂ ಮಂಜೂಷವನ್ನು ಹೊತ್ತ ಮತ್ತು ವಾದ್ಯನುಡಿಸುವ ಎಲ್ಲಾ ಲೇವಿಯರೂ, ಹೊರುವವರ ಮುಖ್ಯಸ್ಥನಾದ ಕೆನನ್ಯನೂ ನೂಲಿನ ನಿಲುವಂಗಿಗಳನ್ನು ಧರಿಸಿಕೊಂಡಿದ್ದನು. ದಾವೀದನು ಇದರ ಹೊರತಾಗಿ ನಾರಿನ ಏಫೋದನ್ನೂ ಧರಿಸಿಕೊಂಡಿದ್ದನು.28ಹೀಗೆ ಎಲ್ಲಾ ಇಸ್ರಾಯೇಲರು ಆನಂದ ಘೋಷಣೆಗಳಿಂದಲೂ, ಕೊಂಬು ಮತ್ತು ತುತ್ತೂರಿಗಳನ್ನು, ತಾಳ, ತಂತಿ ವಾದ್ಯಗಳ ಸಂಗೀತದಿಂದ ತಾಳಹಾಕುತ್ತಾ ಕಿನ್ನರಿ ಸ್ವರಮಂಡಲಗಳನ್ನು ನುಡಿಸುತ್ತಾ, ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತಂದರು.29ಯೆಹೋವನ ಒಡಂಬಡಿಕೆ ಮಂಜೂಷವು ದಾವೀದನ ನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿನೋಡಿ ದಾವೀದನು ಜಿಗಿಯುತ್ತಾ, ಕುಣಿಯುತ್ತಾ, ನೃತ್ಯಮಾಡುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.
161ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.2ಆ ಯಜ್ಞಗಳು, ಹೋಮಗಳು ಸಮರ್ಪಣೆಯಾದ ನಂತರ ದಾವೀದನು ಇಸ್ರಾಯೇಲರನ್ನು ಯೆಹೋವನ ಹೆಸರಿನಿಂದ ಆಶೀರ್ವದಿಸಿದನು.3ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.ಮಂಜೂಷದ ಮುಂದೆ ಹಾಡಿದ ಕೀರ್ತನೆ
4ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.5ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು.6ಬೆನಾಯ, ಯೆಹಜೀಯೇಲ್ ಎಂಬ ಯಾಜಕರು ದೇವರ ಒಡಂಬಡಿಕೆ ಮಂಜೂಷದ ಮುಂದೆ ನಿತ್ಯವೂ ತುತ್ತೂರಿಗಳನ್ನು ಊದುವುದಕ್ಕೆ ನೇಮಕವಾದರು.7ದಾವೀದನು ಆಸಾಫನನ್ನೂ, ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನಂದರೆ;
8<<ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.
9ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ. 10ಆತನ ಪರಿಶುದ್ಧನಾಮದಲ್ಲಿ ಸಂತೋಷಪಡಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ನಿತ್ಯವೂ ಅಪೇಕ್ಷಿಸಿ ಹರ್ಷಿಸಲಿ.
11ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ. 12ಆತನ ಸೇವಕನಾದ ಇಸ್ರಾಯೇಲಿನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು,
13ಮಹತ್ಕಾರ್ಯಗಳನ್ನು, ನ್ಯಾಯ ನಿರ್ಣಯಗಳನ್ನು ಸ್ಮರಿಸಿರಿ.
14ಯೆಹೋವನೆಂಬಾತನು ನಮ್ಮ ದೇವರು, ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ. 15ಆತನು ಸಾವಿರಾರು ತಲೆಮಾರಿನವರೆಗೂ ಇರುವಂತೆ ಮಾಡಿದ ವಾಗ್ದಾನ ಮತ್ತು ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.
16ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು.
17ಅದು ರಾಜಶಾಸನದಂತಿರುವುದು ಎಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವುದೆಂದು ಇಸ್ರಾಯೇಲರಿಗೂ ಮಾತುಕೊಟ್ಟನು.
18ನೀವು ಇನ್ನೂ ಬಹು ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳು ಆಗಿರುವಾಗಲೇ 19ಆತನು, <ನಿಮಗೆ ಈ ದೇಶವನ್ನು ಕೊಡುವೆನು ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು> ಎಂದು ವಾಗ್ದಾನ ಮಾಡಿದನು.
20ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ
21ಅವರಿಗೆ ಯಾರಿಂದಲೂ ಅನ್ಯಾಯವಾಗಲಿ, ಅಪಾಯವಾಗಲಿ ಆಗಲು ಬಿಡಲಿಲ್ಲ. ಆತನು ಅವರ ವಿಷಯದಲ್ಲಿ ಅರಸನನ್ನು ಗದರಿಸಿ,
22<ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು. ನನ್ನ ಪ್ರವಾದಿಗಳಿಗೆ ಯಾವ ಕೇಡನ್ನು ಮಾಡಬಾರದು> ಎಂದು ಹೇಳಿದನು. 23ಎಲ್ಲಾ ಭೂನಿವಾಸಿಗಳೇ ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿಹೇಳಿರಿ.
24ಜನಾಂಗಗಳಲ್ಲಿ ಆತನ ಘನತೆಯನ್ನು ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಿಪಡಿಸಿರಿ. 25ಯೆಹೋವನು ದೊಡ್ಡವನು, ಬಹಳವಾಗಿ ಸ್ತುತಿಗೆ ಪಾತ್ರನು ಆಗಿದ್ದಾನೆ. ಎಲ್ಲಾ ದೇವತೆಗಳಲ್ಲಿ ಆತನೇ ಅದ್ಭುತನಾದವನು.
26ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.
27ಆತನ ಸಾನ್ನಿಧ್ಯದಲ್ಲಿ ಮಾನ ಮಹಿಮೆಗಳು ಆತನ ಪವಿತ್ರಾಲಯದಲ್ಲಿ ಮಹಿಮೆ, ಸ್ತುತಿಸ್ತೋತ್ರಗಳು, ಸಂತೋಷಗಳೂ ಇರುತ್ತವೆ. 28ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ.
29ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ. 30ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಸಾಷ್ಟಾಂಗವೆರಗಿ ನಮಸ್ಕರಿಸಿರಿ. ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ,
31ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. 32ಭೂನಿವಾಸಿಗಳಿಗೆ ನ್ಯಾಯತೀರಿಸುವುದಕ್ಕೆ ಬರುವನೆಂದು ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ.
33ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ. 34ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.
35ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದುರಿಹೋಗಿರುವ ನಮ್ಮನ್ನು ಬಿಡಿಸಿ ಒಟ್ಟುಗೂಡಿಸು; ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ. 36ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ>> ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.ಯೆರೂಸಲೇಮ್ ಮತ್ತು ಗಿಬ್ಯೋನಿನಲ್ಲಿ ಆರಾಧನೆ
37ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ,38ಯೆದುತೂನನ ಮಗನಾದ ಓಬೇದೆದೋಮ್ ಮತ್ತು ಹೋಸ ಇವರನ್ನು, ಅವರ ಆರುವತ್ತೆಂಟು ಸಹೋದರರನ್ನೂ ಅಲ್ಲೇ ಇರಿಸಿದನು.39ಯಾಜಕನಾದ ಚಾದೋಕನನ್ನೂ, ಅವನ ಸಹೋದರರನ್ನೂ ಗಿಬ್ಯೋನಿನ ಪೂಜಾಸ್ಥಳಗಳಲ್ಲಿದ್ದ ಯೆಹೋವನ ಗುಡಾರದ ಬಳಿಯಲ್ಲಿ ಇರಿಸಿದನು.40ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.41ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು.42ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.43ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸುವುದಕ್ಕಾಗಿ ಹೋದನು.
17ದೇವರು ದಾವೀದನಿಗೆ ವಾಗ್ದಾನಮಾಡಿದ್ದು
1ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, <<ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ>> ಎಂದು ಹೇಳಿದನು.2ನಾತಾನನು ದಾವೀದನಿಗೆ, <<ನಿನಗೆ ಮನಸ್ಸಿದ್ದಂತೆ ಮಾಡು, ದೇವರು ನಿನ್ನ ಸಂಗಡ ಇರುತ್ತಾನೆ>> ಎಂದನು.3ಅದೇ ರಾತ್ರಿಯಲ್ಲಿ ದೇವರು ನಾತಾನನಿಗೆ ಆಜ್ಞಾಪಿಸಿದ್ದೇನೆಂದರೆ,4<<ಹೋಗಿ ನನ್ನ ಸೇವಕನಾದ ದಾವೀದನಿಗೆ, <ನೀನು ನನಗೆ ಆಲಯವನ್ನು ಕಟ್ಟಬಾರದು.5ನಾನು ಇಸ್ರಾಯೇಲರನ್ನು ಐಗುಪ್ತದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರಗಳಲ್ಲಿ ವಾಸಿಸುತ್ತಾ ಇದ್ದೆನು.6ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗೆಲ್ಲಾ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೋಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ನ್ಯಾಯಸ್ಥಾಪಕನ್ನಾದರೂ ನೀವು ನನಗೋಸ್ಕರ ದೇವದಾರುಮರದ ಮನೆಯನ್ನು ಏಕೆ ಕಟ್ಟಲಿಲ್ಲ ಎಂದು ಕೇಳಿದೆನೋ ಎಂಬುದಾಗಿ ಯೆಹೋವನು ಅನ್ನುತ್ತಾನೆ> >> ಎಂದು ಹೇಳು ಎಂದನು.7ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, <<ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ಕರೆದುಕೊಂಡು ಬಂದು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.8ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.9ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಮಾಡುವರು.10ಪೂರ್ವಕಾಲದಲ್ಲೂ, ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೆ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನಿನ್ನ ಶತ್ರುಗಳನ್ನು ನಿನಗೆ ಅಧೀನಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನು ಎಂದು ಮಾತುಕೊಡುತ್ತೇನೆ.11ನಿನ್ನ ಆಯುಷ್ಕಾಲವು ಮುಗಿದು ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.12ಅವನು ನನಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.13ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನನ್ನ ಕೃಪೆಯನ್ನು ನಿನಗಿಂತ ಮುಂಚೆ ಇದ್ದವನಿಂದ ತೆಗೆದು ಹಾಕಿದ ಹಾಗೆ ಅವನಿಂದ ತೆಗೆಯುವುದಿಲ್ಲ.14ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವುದು>> ಎಂಬುದೇ.15ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.ದಾವೀದನ ಪ್ರಾರ್ಥನೆ
16ಆಗ ಅರಸನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು ಹೇಳಿದ್ದೇನೆಂದರೆ, <<ದೇವರೇ, ಯೆಹೋವನೇ, ನನ್ನಂಥವನಿಗೆ ಈ ಪದವಿಯನ್ನು ಅನುಗ್ರಹಿಸಿದ್ದಿ, ನಾನೆಷ್ಟರವನು? ನನ್ನ ಮನೆ ಎಷ್ಟರದು?17ದೇವರೇ, ಇದು ಸಾಲದೆಂದೆಣಿಸಿ, ನಿನ್ನ ಸೇವಕನ ಮುಂಬರುವ ಸಂತಾನದ ವಿಷಯವಾಗಿಯೂ ನನಗೆ ವಾಗ್ದಾನಮಾಡಿರುವೆ. ದೇವರೇ, ಯೆಹೋವನೇ, ನಾನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ನೀನು ನನ್ನನ್ನು ಕಟಾಕ್ಷಿಸಿದ್ದೀ.18ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ. ಅವನು ತನಗುಂಟಾದ ಘನತೆಯನ್ನು ಕುರಿತು ಇನ್ನೇನು ಹೇಳಾನು.19ಯೆಹೋವನೇ, ನಿನ್ನ ಸೇವಕನ ಮೇಲಿಗಾಗಿಯೂ, ನಿನ್ನ ಚಿತ್ತಾನುಸಾರವಾಗಿಯೂ ಈ ಎಲ್ಲಾ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ಸತ್ಯ ಮಹತ್ವವನ್ನು ತೋರ್ಪಡಿಸಿರುವೆ.20ಯೆಹೋವನೇ, ನಿನಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ಬೇರೆ ದೇವರೇ ಇಲ್ಲವೆಂಬುದು ನಿಶ್ಚಯ.21ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಭೂಲೋಕದಲ್ಲಿ ಯಾವುದಿರುತ್ತದೆ? ದೇವರಾದ ನೀನೇ ಚಿತ್ತೈಯಿಸಿ, ಅದನ್ನು ವಿಮೋಚಿಸಿ, ಸ್ವಪ್ರಜೆಯಾಗಿ ಮಾಡಿಕೊಂಡಿ. ಭಯಂಕರವಾದ ಮಹತ್ಕಾರ್ಯಗಳಿಂದ ನಿನ್ನ ಹೆಸರನ್ನು ಪ್ರಸಿದ್ಧಿಪಡಿಸಿದಿ. ನೀನು ಐಗುಪ್ತರ ಕೈಯೊಳಗಿಂದ ತಪ್ಪಿಸಿ ರಕ್ಷಿಸಿದ ನಿನ್ನ ಪ್ರಜೆಯ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿಬಿಟ್ಟಿ.22ಇಸ್ರಾಯೇಲರು ಸದಾಕಾಲವು ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದ್ದೀ. ಯೆಹೋವನೇ, ನೀನು ಅವರಿಗೆ ದೇವರಾಗಿದ್ದಿ.23ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.24ಜನರು <ಸೇನಾಧೀಶ್ವರನಾದ ಯೆಹೋವನು ಇಸ್ರಾಯೇಲ್ ದೇವರೂ, ಶರಣನೂ ಆಗಿದ್ದಾನೆ. ತನ್ನ ಸೇವಕನಾದ ದಾವೀದನ ಮನೆಯನ್ನು ತನ್ನ ಸನ್ನಿಧಿಯಲ್ಲಿ ಸ್ಥಿರವಾಗಿ ಇಟ್ಟುಕೊಳ್ಳುತ್ತಾನೆ> ಎಂದು ನಿನ್ನ ನಾಮವನ್ನು ಕೊಂಡಾಡಲಿ.25ನನ್ನ ದೇವರೇ, ನೀನು ನಿನ್ನ ಸೇವಕನಿಗೆ, <ನಾನು ನಿನಗೊಂದು ಮನೆಯನ್ನು ಕಟ್ಟುವೆನು> ಎಂದು ವಾಗ್ದಾನ ಮಾಡಿದ್ದರಿಂದ ಅವನು ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.26ಯೆಹೋವನೇ, ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ನನ್ನ ದೇವರಾಗಿರುತ್ತೀ.27ಈಗ ನೀನು ನಿನ್ನ ಸೇವಕನ ಮನೆಯನ್ನು ಆಶೀರ್ವದಿಸಿ, ಅದನ್ನು ಸದಾಕಾಲವೂ ನಿನ್ನ ಆಶ್ರಯದಲ್ಲಿಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀ. ಯೆಹೋವನೇ, ನೀನು ಅದನ್ನು ಆಶೀರ್ವದಿಸಿದ್ದೀ. ಅದು ನಿತ್ಯವೂ ಸೌಭಾಗ್ಯದಿಂದಿರುವುದು>> ಎಂದು ಪ್ರಾರ್ಥಿಸಿದನು.
18ದಾವೀದನು ಸಾಧಿಸಿದ ದಿಗ್ವಿಜಯಗಳು
1ದಾವೀದನು ಫಿಲಿಷ್ಟಿಯರನ್ನು ಮುತ್ತಿಗೆಹಾಕಿ, ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಮತ್ತು ಅದರ ಗ್ರಾಮಗಳನ್ನೂ ತೆಗೆದುಕೊಂಡನು.2ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪಕೊಡಬೇಕಾಯಿತು.3ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು.4ದಾವೀದನು ಅವನ ಸಾವಿರ ರಥಗಳನ್ನೂ, ಏಳುಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು, ಉಳಿದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿ ಬಿಟ್ಟನು.5ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ, ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.6ಇದಲ್ಲದೆ ಅವನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ವಿಜಯ ದೊರಕಿತು.7ದಾವೀದನು ಹದರೆಜರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.8ಇದಲ್ಲದೆ ದಾವೀದನು ಹದರೆಜರನ ಟಿಭತ್ ಮತ್ತು ಕೂನ್ ಎಂಬ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೊಲೊಮೋನನು ಆ ತಾಮ್ರದಿಂದ ಕಂಚಿನ ಕಡಲೆಂಬ ಪಾತ್ರೆಯನ್ನೂ, ಕಂಬಗಳನ್ನೂ ಮತ್ತು ಬೇರೆ ಸಾಮಾನುಗಳನ್ನು ಇದೇ ತಾಮ್ರದಿಂದ ಮಾಡಿಸಿದನು.9ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.10ತೋವಿಗೂ ಹದರೆಜನಿಗೂ ವಿರೋಧವಿತ್ತು. ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ರೆಗಳನ್ನು ತಂದನು.11ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.12ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಸೈನಿಕರನ್ನು ಸೋಲಿಸಿದನು.13ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.ದಾವೀದನ ಸರದಾರರು
14ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನೀತಿ ಮತ್ತು ನ್ಯಾಯದಿಂದ ಕಾರ್ಯ ನಿರ್ವಹಿಸುತ್ತಿದ್ದನು.15ಚೆರೂಯಳ ಮಗನಾದ ಯೋವಾಬನು ಅವನ ಸೇನಾಧಿಪತಿಯೂ, ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.16ಅಹೀಟೂಬನ ಮಗನಾದ ಚಾದೋಕನೂ ಮತ್ತು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು. ಶವ್ಷನು ಲೇಖಕನು.17ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.
19ದಾವೀದನು ಅಮ್ಮೋನಿಯರನ್ನು ಸೋಲಿಸಿದ್ದು
1ಇದಾದನಂತರ ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗನು ಅರಸನಾದನು.2ದಾವೀದನು, <<ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು>> ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವುದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದರು.3ಆಗ ಅಮ್ಮೋನ್ ಪ್ರಭುಗಳು ಹಾನೂನನಿಗೆ, <<ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ, ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ>> ಎಂದು ಹೇಳಿದರು.4ಆದುದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.5ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದಾಗ ಅವನು ಬಹಳ ಅವಮಾನಹೊಂದಿ ಅವರಿಗೆ ಆಳುಗಳ ಮುಖಾಂತರವಾಗಿ, <<ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿದ್ದು ಅನಂತರ ಬನ್ನಿರಿ>> ಎಂದು ಹೇಳಿಸಿದನು.ದಾವೀದನ ಯುದ್ಧಭಟರ ಶೂರಕೃತ್ಯಗಳು
6ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಮತ್ತು ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ, ಮಾಕದಿಂದಲೂ, ಚೋಬಾ ರಾಜ್ಯದಿಂದಲೂ ರಥಗಳನ್ನೂ, ರಾಹುತರನ್ನು ತರಿಸುವುದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನೂ ಕಳುಹಿಸಿದರು.7ಆಗ ಮೂವತ್ತೆರಡು ಸಾವಿರ ರಥಬಲದವರೂ, ಮಾಕದ ಅರಸನೂ ಮತ್ತು ಅವನ ದಂಡಾಳುಗಳು ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.8ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.9ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ನಿಂತರು.10ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಎಲ್ಲಾ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.11ಉಳಿದ ಜನರನ್ನು ತನ್ನ ತಮ್ಮನಾದ ಅಬ್ಷೈಯ ವಶಕ್ಕೆ ಕೊಟ್ಟು ಅವನಿಗೆ,12<<ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ, ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.13ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ, ನಮ್ಮ ಪೌರುಷವನ್ನು ತೋರಿಸೋಣ. ಯೆಹೋವನು ತನಗೆ ಸರಿಕಾಣುವ ಹಾಗೆ ಮಾಡಲಿ>> ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರುದ್ಧವಾಗಿ ಕಳುಹಿಸಿದನು.14ಯೋವಾಬನೂ ಅವನ ಜನರೂ ಅರಾಮ್ಯರಿಗೆ ವಿರುದ್ಧವಾಗಿ ಯುದ್ಧಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.15ಅವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮನಾದ ಅಬ್ಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಯೆರೂಸಲೇಮಿಗೆ ಹೋದನು.16ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಅಪಜಯ ಹೊಂದಿದ್ದೇವೆಂದು ಗೊತ್ತಾದಾಗ ಅವರು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಕರೆಕಳುಹಿಸಿದರು. ಹದರೆಜರನ ಸೇನಾಧಿಪತಿಯಾದ ಶೋಫಕನು ಅವರ ನಾಯಕನಾದನು.17ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ, ಅರಾಮ್ಯರ ಸಮೀಪಕ್ಕೆ ಬಂದು ಅವರೊಡನೆ ಕಾದಾಡುವುದಕ್ಕೊಸ್ಕರ ವ್ಯೂಹ ಕಟ್ಟಿದನು.18ಅರಾಮ್ಯರು ಯುದ್ಧಕ್ಕೆ ನಿಂತಾಗ ಇಸ್ರಾಯೇಲರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುಸಾವಿರ ರಥಗಳನ್ನು ಹಾಳುಮಾಡಿ, ನಲ್ವತ್ತು ಸಾವಿರ ಕಾಲಾಳುಗಳನ್ನು ಕೊಂದುಬಿಟ್ಟನು. ಅವನು ಸೇನಾಧಿಪತಿಯಾದ ಶೋಫಕನನ್ನೂ ಕೊಂದನು.19ಹದರೆಜರನ ದಾಸರು ಇಸ್ರಾಯೇಲರ ಮುಂದೆ ತಮ್ಮ ಕೈ ಸಾಗದೆಂದು ತಿಳಿದು ದಾವೀದನೊಡನೆ ಒಪ್ಪಂದ ಮಾಡಿಕೊಂಡು ಅವನ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಮನಸ್ಸು ಮಾಡಲ್ಲಿಲ್ಲ.
20ದಾವೀದನು ರಬ್ಬ ಪಟ್ಟಣವನ್ನು ವಶಪಡಿಸಿಕೊಂಡಿದ್ದು
1ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.2ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲಾ ತೂಕದ್ದು. ಅದರಲ್ಲಿದ್ದ ಅಮೂಲ್ಯವಾದ ರತ್ನಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು.3ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಕ್ಕೆ ನೇಮಿಸಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇಮಿಗೆ ಬಂದನು.ಫಿಲಿಷ್ಟಿಯರೊಡನೆ ಯುದ್ಧ
4ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬುವವನು ರೆಫಾಯನಾದ ಸಿಪ್ಪೈ ಎಂಬುವವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು.5ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.6ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು.7ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.8ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.
21ದಾವೀದನು ಮಾಡಿಸಿದ ಜನಗಣತಿ
1ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.2ದಾವೀದನು ಯೋವಾಬನನ್ನೂ ಮತ್ತು ಜನಾಧಿಪತಿಗಳನ್ನೂ ಕರೆದು, <<ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ, ಇಸ್ರಾಯೇಲರನ್ನು ಲೆಕ್ಕ ಮಾಡಿಕೊಂಡು ಬನ್ನಿರಿ>> ಎಂದು ಆಜ್ಞಾಪಿಸಿದನು.3ಆಗ ಯೋವಾಬನು, <<ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದ್ದನ್ನು ಅಪೇಕ್ಷಿಸುವುದೇನು? ಇಸ್ರಾಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ>> ಎಂದನು.4ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ನಡೆಸಿದ್ದರಿಂದ ಅವನು ಹೊರಟುಹೋಗಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿದನು.5ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಸಂಖ್ಯೆಯು ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ ಮತ್ತು ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.6ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದುದರಿಂದ ಅವನು ಲೇವಿ ಮತ್ತು ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.ದಾವೀದನ ಪಾಪಕ್ಕೆ ಶಿಕ್ಷೆ
7ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು.8ಆಗ ದಾವೀದನು, <<ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು>> ಎಂದು ದೇವರನ್ನು ಪ್ರಾರ್ಥಿಸಿದನು.9ಯೆಹೋವನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನೆಂದರೆ,10ಯೆಹೋವನು ಇಂತೆನ್ನುತ್ತಾನೆ, <<ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂಬುದಾಗಿ ದಾವೀದನಿಗೆ ಹೇಳು>> ಎಂದನು.11ಆಗ ಗಾದನು ದಾವೀದನ ಬಳಿಗೆ ಹೋಗಿ ಅವನಿಗೆ, <<ಯೆಹೋವನು ಹೇಳುವುದೇನೆಂದರೆ,12<ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಈ ಮೂರರಲ್ಲಿ ಒಂದನ್ನು ಆರಿಸಿಕೊ> ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಆಲೋಚಿಸಿ ಹೇಳು>> ಎಂದು ಹೇಳಿದನು.13ಅದಕ್ಕೆ ದಾವೀದನು ಗಾದನಿಗೆ, <<ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಮನುಷ್ಯರ ಕೈಯಲ್ಲಿ ಬೀಳುವುದಕ್ಕಿಂತ ಯೆಹೋವನ ಹಸ್ತದಲ್ಲಿ ಬೀಳುವುದು ಮೇಲು. ಆತನು ಕೃಪಾಪೂರ್ಣನು>> ಎಂದು ಹೇಳಿದನು.14ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.15ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, <<ಸಾಕು ನಿನ್ನ ಕೈಯನ್ನು ಹಿಂದೆಗೆ>> ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.16ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ, ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಣಿತಟ್ಟನ್ನು ಹೊದ್ದುಕೊಂಡು ಬೋರಲು ಬಿದ್ದರು.17ಮತ್ತು ದಾವೀದನು ದೇವರಿಗೆ, <<ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ. ಮಹಾಪಾಪಮಾಡಿದವನು ನಾನೇ. ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವುದಕ್ಕೆ ಅವರಿಗೆ ವಿರುದ್ಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರುದ್ಧವಾಗಿರಲಿ>> ಎಂದು ಬೇಡಿಕೊಂಡನು.ದಾವೀದನು ಯಜ್ಞವೇದಿಯನ್ನು ಕಟ್ಟಿಸಿದ್ದು
18ಆಗ ಯೆಹೋವನ ದೂತನು ಗಾದನಿಗೆ, <<ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವುದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು>> ಎಂದು ಆಜ್ಞಾಪಿಸಿದನು.19ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.20ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನ ಜೊತೆಯಲ್ಲಿದ್ದ ಅವನ ನಾಲ್ಕು ಮಕ್ಕಳು ಅಡಗಿಕೊಂಡಿದ್ದರು.21ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡು ಕಣವನ್ನು ಬಿಟ್ಟು ಹೋಗಿ ಅವನಿಗೆ ಅಡ್ಡ ಬಿದ್ದನು.22ದಾವೀದನು ಅವನಿಗೆ, <<ನಿನ್ನ ಕಣವನ್ನೂ ಮತ್ತು ಭೂಮಿಯನ್ನು ನನಗೆ ಕೊಡು, ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುತ್ತೇನೆ. ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು>> ಎಂದು ಹೇಳಿದನು.23ಆಗ ಒರ್ನಾನನು ದಾವೀದನಿಗೆ, <<ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಯಜ್ಞಮಾಡೋಣವಾಗಲಿ. ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆಗಳೂ, ನೈವೇದ್ಯಕ್ಕೋಸ್ಕರ ಗೋದಿಯೂ ಇರುತ್ತವೆ. ಇವೆಲ್ಲವನ್ನೂ ಕೊಡುತ್ತೇನೆ>> ಎಂದು ಹೇಳಿದನು.24ಅರಸನಾದ ದಾವೀದನು ಒರ್ನಾನನಿಗೆ <<ಹಾಗಲ್ಲ ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ ನಿನಗೆ ಸೇರಿದ್ದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸುವುದಿಲ್ಲ>> ಎಂದು ಹೇಳಿದನು.25ದಾವೀದನು ಆ ಭೂಮಿಗೋಸ್ಕರ ಅವನಿಗೆ ಆರುನೂರು ಶೆಕಲ್ ಬಂಗಾರವನ್ನು ಕೊಟ್ಟನು.26ಅಲ್ಲಿ ದಾವೀದನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿ, ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ, ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ,27ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು.ದಾವೀದನು ದೇವಾಲಯಕ್ಕೋಸ್ಕರ ಸ್ಥಳವನ್ನು ಗೊತ್ತುಮಾಡಿದ್ದು
28ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರ ಮತ್ತು ಯಜ್ಞವೇದಿಯು ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು.29ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು.30ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರ ದೊರಕಿತು.
221ಆಗ ದಾವೀದನು, <<ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ>> ಎಂದು ಹೇಳಿದನು.ದೇವಾಲಯ ಕಟ್ಟುವುದಕ್ಕಾಗಿ ಮಾಡಿದ ಸಿದ್ಧತೆ
2ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.3ಇದಲ್ಲದೆ ದಾವೀದನು ದ್ವಾರಗಳ ಮೂಲಕ ಹೋಗುವ ಬಾಗಿಲುಗಳಿಗೆ ಬೇಕಾದ ಮೊಳೆಗಳನ್ನೂ, ಪಟ್ಟಿಗಳನ್ನೂ ಮಾಡುವುದಕ್ಕೆ ಬಹಳ ಕಬ್ಬಿಣಗಳನ್ನೂ,4ಲೆಕ್ಕವಿಲ್ಲದ್ದಷ್ಟು ತಾಮ್ರವನ್ನೂ, ಎಣಿಸಲಾರದಷ್ಟು ದೇವದಾರುಮರಗಳನ್ನೂ ಸಿದ್ಧಪಡಿಸಿದನು. ಚೀದೋನ್ಯರು ಮತ್ತು ತೂರ್ಯರೂ ಅವನಿಗೆ ದೇವದಾರುಮರಗಳನ್ನು ತಂದುಕೊಟ್ಟರು.5ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು.6ಆ ಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರೆಯಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು.7ದಾವೀದನು ಸೊಲೊಮೋನನಿಗೆ, <<ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು.8ಆದರೆ ಯೆಹೋವನು ನನಗೆ, <ನೀನು ಬಹಳ ರಕ್ತವನ್ನು ಸುರಿಸಿದವನೂ, ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.9ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು.10ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬುದಾಗಿ ಹೇಳಿದನು>.11ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.12ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ, ಇಸ್ರಾಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ.13ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.14ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ, ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು.15ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಕಲ್ಲುಕುಟಿಗರೂ, ಶಿಲ್ಪಿಗಳೂ,16ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ>> ಎಂದು ಹೇಳಿದನು.17ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ದಾವೀದನು ಇಸ್ರಾಯೇಲರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿದನು.18ಆತನು ಅವರಿಗೆ, <<ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.19ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ>> ಎಂದು ಹೇಳಿದನು.
23ಲೇವಿಯರ ಕರ್ತವ್ಯಗಳು
1ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.2ಅವನು ಇಸ್ರಾಯೇಲರ ಎಲ್ಲಾ ಅಧಿಪತಿಗಳನ್ನೂ, ಯಾಜಕರನ್ನೂ ಮತ್ತು ಲೇವಿಯರನ್ನೂ ತನ್ನ ಬಳಿಯಲ್ಲಿ ಒಟ್ಟುಗೂಡಿಸಿದನು.3ಮೂವತ್ತು ವರ್ಷಕ್ಕಿಂತ ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಾಗಿತ್ತು.4ದಾವೀದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು,5ದ್ವಾರಪಾಲಕರನ್ನಾಗಿ, ನಾಲ್ಕು ಸಾವಿರ ಜನರನ್ನು ಮತ್ತು ತಾನು ಸಿದ್ಧಪಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನೂ ನೇಮಿಸಿದನು.6ಇದಲ್ಲದೆ ದಾವೀದನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು ಇವರನ್ನು ವಿವಿಧ ವರ್ಗಗಳನ್ನಾಗಿ ವಿಭಾಗಿಸಿದನು.ಗೇರ್ಷೋನ್ಯರು
7ಗೇರ್ಷೋನ್ಯರ ಮೂಲಪುರುಷರು ಲದ್ದಾನ್ ಮತ್ತು ಶಿಮ್ಮೀ ಎಂಬುವರು.8ಲದ್ದಾನನಿಗೆ ಪ್ರಧಾನನಾದ ಯೆಹೀಯೇಲ್, ಜೇತಾಮ್ ಮತ್ತು ಯೋವೇಲ್ ಎಂಬ ಮೂರು ಮಕ್ಕಳಿದ್ದರು.9ಶಿಮ್ಮೀಗೆ ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಕ್ಕಳಿದ್ದರು. ಇವರು ಲದ್ದಾನ್ಯರ ಗೋತ್ರ ಪ್ರಧಾನರು.10ಶಿಮ್ಮೀಗೆ ಯಹತ್, ಜೀನ, ಯೆಯೂಷ್ ಮತ್ತು ಬೆರೀಯ ಎಂಬ ನಾಲ್ಕು ಮಕ್ಕಳಿದ್ದರು.11ಯಹತನು ಪ್ರಧಾನನು, ಜೀಜನು ಎರಡನೆಯವನಾಗಿದ್ದನು, ಯೆಯೂಷ್, ಬೆರೀಯರಿಗೆ ಹೆಚ್ಚು ಮಕ್ಕಳಿರಲಿಲ್ಲವಾದುದರಿಂದ ಅವರಿಬ್ಬರೂ ಒಂದೇ ಕುಟುಂಬವಾಗಿ ವರ್ಗವಾಗಿಯೂ ಎಣಿಸಲ್ಪಟ್ಟಿದ್ದರು.ಕೆಹಾತ್ಯರು
12ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಎಂಬ ನಾಲ್ಕು ಮಕ್ಕಳಿದ್ದರು.13ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬುವವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.14ದೇವರ ಮನುಷ್ಯನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಎಣಿಸಲ್ಪಟ್ಟರು.15ಮೋಶೆಯ ಮಕ್ಕಳು ಗೇರ್ಷೋಮ್ ಮತ್ತು ಎಲೀಯೆಜೆರ್ ಎಂಬುವವರು.16ಪ್ರಧಾನನಾದ ಶೆಬೂವೇಲನು ಗೇರ್ಷೋಮನ ಮಗನು.17ಪ್ರಧಾನನಾದ ರೆಹಬ್ಯ ಎಲೀಯೆಜೆರನ ಮಗನು. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಕ್ಕಳಿದ್ದರು.18ಪ್ರಧಾನನಾದ ಶೆಲೋಮೋತನು ಇಚ್ಹಾರನ ಮಗ.19ಹೆಬ್ರೋನನ ಮಕ್ಕಳಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.20ಉಜ್ಜೀಯೇಲನ ಮಕ್ಕಳಲ್ಲಿ ಮೀಕನು ಪ್ರಧಾನನು, ಇಷ್ಷೀಯನು ಎರಡನೆಯವನು.ಮೆರಾರೀಯರು
21ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಮಹ್ಲೀಯ ಮಕ್ಕಳು ಎಲ್ಲಾಜಾರ್ ಮತ್ತು ಕೀಷ್.22ಎಲ್ಲಾಜಾರನು ಗಂಡು ಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು. ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು.23ಮೂಷೀಗೆ ಮಹ್ಲೀ, ಏದೆರ್ ಮತ್ತು ಯೆರೇಮೋತ್ ಎಂಬ ಮೂವರು ಮಕ್ಕಳಿದ್ದರು.24ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರಾಗಿದ್ದರು.25ಇಸ್ರಾಯೇಲಿನ ದೇವರಾದ ಯೆಹೋವನು, ತನ್ನ ಪ್ರಜೆಗಳಿಗೆ ವಿಶ್ರಾಂತಿಯನ್ನು ಅನುಗ್ರಹಿಸಿ, ಆತನು ಸದಾಕಾಲವೂ ಯೆರೂಸಲೇಮಿನಲ್ಲಿ ವಾಸಿಸುವವನಾದುದರಿಂದ,26ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ, ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವೀದನು ಈ ಪ್ರಕಾರ ಆಜ್ಞೆ ವಿಧಿಸಿದನು.27ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರೆಲ್ಲರೂ ಪರಿಗಣಿಸಲ್ಪಟ್ಟರು.28ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಳಗಳ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ,29ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ,30ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ನಿಯಮಿತ ಸಂಖ್ಯೆಗೆ ಸರಿಯಾಗಿ31ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ.32ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ, ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು.
24ಯಾಜಕರ ಕರ್ತವ್ಯಗಳು
1ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.2ನಾದಾಬ್ ಮತ್ತು ಅಬೀಹೂ ಎಂಬುವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತು ಹೋದುದರಿಂದ ಎಲ್ಲಾಜಾರನೂ, ಈತಾಮಾರನೂ ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.3ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.4ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,5ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.6ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ, ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರನ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇಮಿಸಿ ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು.7ಮೊದಲನೆಯ ಚೀಟು ಯೆಹೋಯಾರೀಬನಿಗೆ, ಎರಡನೆಯದು ಯೆದಾಯನಿಗೆ,8ಮೂರನೆಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮನಿಗೆ,9ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾಮೀನನಿಗೆ,10ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ,11ಒಂಬತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ,12ಹನ್ನೊಂದನೆಯದು ಎಲ್ಯಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ,13ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಷೆಬಾಬನಿಗೆ,14ಹದಿನೈದನೆಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,15ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆಯದು ಹಪ್ಪಿಚ್ಚೇಚನಿಗೆ,16ಹತ್ತೊಂಬತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ,17ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆರಡನೆಯದು ಗಾಮೂಲನಿಗೆ,18ಇಪ್ಪತ್ತ ಮೂರನೆಯದು ದೆಲಾಯನಿಗೆ, ಇಪ್ಪತ್ತ ನಾಲ್ಕನೆಯದು ಮಾಜ್ಯನಿಗೆ ಬಿದ್ದಿತು.19ಆರೋನ್ಯರು ಈ ವರ್ಗ ಕ್ರಮದಿಂದ ಯೆಹೋವನ ಆಲಯಕ್ಕೆ ಬಂದು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನೇಮಿಸಿದ ಸೇವೆಯನ್ನು ನಡೆಸತಕ್ಕದ್ದು.ಉಳಿದ ಲೇವಿಯರು
20ಉಳಿದ ಲೇವಿಯರ ಪಟ್ಟಿ. ಅಮ್ರಾಮನ ಸಂತಾನದವರಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು.21ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನೂ,22ಇಚ್ಹಾರನ ಸಂತಾನದ ಶೆಲೋಮೋತನ ಕುಟುಂಬದವರಲ್ಲಿ ಯಹತನೂ ಪ್ರಧಾನರು.23ಹೆಬ್ರೋನನ ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು, ಮೂರನೆಯವನು ಮತ್ತು ಯೆಕಮ್ಮಾಮನು ನಾಲ್ಕನೆಯವನು,24ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ,25ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನು ಪ್ರಧಾನರು.26ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವನು ಬೆನೋ.27ಮೆರಾರೀಯ ಸಂತಾನದವರಲ್ಲಿ ಯಾಜ್ಯ, ಬೆನೋ, ಶೋಹಮ್, ಜಕ್ಕೂರ್ ಮತ್ತು ಇಬ್ರೀ ಇವರೇ.28ಮಹ್ಲೀಯನ ಮಗನಾದ ಎಲ್ಲಾಜಾರನೂ ಮಕ್ಕಳಿಲ್ಲದೆ ಸತ್ತನು.29ಕೀಷನಿಂದ ಯೆರಹ್ಮೇಲನು ಹುಟ್ಟಿದನು.30ಮೂಷೀಯನ ಮಕ್ಕಳು ಮಹ್ಲೀ, ಏದೆರ್ ಮತ್ತು ಯೆರೀಮೋತ್ ಎಂಬುವವರು.31ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.
25ದೇವಾಲಯದ ಸಂಗೀತ ಮಂಡಳಿ
1ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,2ಆಸಾಫ್ಯರಲ್ಲಿ ಜಕ್ಕೂರ್, ಯೋಸೇಫ್, ನೆತನ್ಯ, ಅಶರೇಲ ಎಂಬವರು. ಇವರು ಅರಮನೆಯ ಗಾಯಕನಾದ ಆಸಾಫನ ಸಹಾಯಕರು.3ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಈ ಆರು ಜನರೂ ಸಹಾಯಕರಾಗಿದ್ದರು.4ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್ ಮತ್ತು ಮಹಜೀಯೋತ್.5ಇವರೆಲ್ಲರು ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಹೇಮಾನನಿಗೆ, <<ನೀನು ಅಭಿವೃದ್ಧಿ ಹೊಂದುವಹಾಗೆ ಮಾಡುವೆನು>> ಎಂಬುದಾಗಿ ವಾಗ್ದಾನ ಮಾಡಿದ್ದನು. ಅದರಂತೆಯೇ ಆತನು ಅವನಿಗೆ ಹದಿನಾಲ್ಕು ಗಂಡುಮಕ್ಕಳನ್ನೂ, ಮೂರು ಹೆಣ್ಣುಮಕ್ಕಳನ್ನೂ ದಯಪಾಲಿಸಿದನು.6ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.7ಇವರು ಯೆಹೋವನ ಕೀರ್ತನೆಗಳನ್ನು ಕಲಿತ ಇವರ ಸಹೋದರರು ಒಟ್ಟು ಇನ್ನೂರ ಎಂಭತ್ತೆಂಟು ಜನರು. ಇವರೆಲ್ಲರೂ ಗಾಯಕ ಪ್ರವೀಣರಾಗಿದ್ದರು.8ಇವರಲ್ಲಿ ಹಿರಿಯರು, ಕಿರಿಯರು, ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾ ಕ್ರಮವನ್ನು ಗೊತ್ತುಮಾಡಿಕೊಂಡರು.9ಚೀಟಿನ ಪ್ರಕಾರವಾಗಿ,ಮೊದಲನೆಯದಾಗಿ ಆಸಾಫ್ಯನಾದ ಯೋಸೇಫನು.
ಎರಡನೆಯವನು ಗೆದಲ್ಯ. ಇವನೂ ಇವನ ಸಹೋದರರೂ, ಮಕ್ಕಳು ಒಟ್ಟು ಹನ್ನೆರಡು ಜನರು.
10ಮೂರನೆಯವನು ಜಕ್ಕೂರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
11ನಾಲ್ಕನೆಯವನು ಇಚ್ರೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
12ಐದನೆಯವನು ನೆತನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 13ಆರನೆಯವನು ಬುಕ್ಕೀಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
14ಏಳನೇಯವನು ಯೆಸರೇಲ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
15ಎಂಟನೆಯವನು ಯೆಶಾಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
16ಒಂಬತ್ತನೆಯದು ಮತ್ತನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 17ಹತ್ತನೆಯವನು ಶಿಮ್ಮೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
18ಹನ್ನೊಂದನೆಯವನು ಅಜರೇಲ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
19ಹನ್ನೆರಡನೆಯವನು ಹಷಬ್ಯ. ಇವನೂ ಇವನ ಸಹೋದರರೂ ಮಕ್ಕಳು ಒಟ್ಟು ಹನ್ನೆರಡು ಜನರು.
20ಹದಿಮೂರನೆಯದು ಶೂಬಾಯೇಲ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 21ಹದಿನಾಲ್ಕನೆಯವನು ಮತ್ತಿತ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳೂ ಒಟ್ಟು ಹನ್ನೆರಡು ಜನರು.
22ಹದಿನೈದನೆಯವನು ಯೆರೆಮೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
23ಹದಿನಾರನೆಯವನು ಹನನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
24ಹದಿನೇಳನೆಯವನು ಯೊಷ್ಬೆಕಾಷ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 25ಹದಿನೆಂಟನೆಯವನು ಹನಾನೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
26ಹತ್ತೊಂಬತ್ತನೆಯವನು ಮಲ್ಲೋತಿ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
27ಇಪ್ಪತ್ತನೆಯವನು ಎಲೀಯಾತ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
28ಇಪ್ಪತ್ತೊಂದನೆಯವನು ಹೋತೀರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 29ಇಪ್ಪತ್ತೆರಡನೆಯವನು ಗಿದ್ದಲ್ತಿ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
30ಇಪ್ಪತ್ತಮೂರನೆಯವನು ಮಹಜೀಯೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
31ಇಪ್ಪತ್ತನಾಲ್ಕನೆಯವನು ರೋಮಮ್ತಿಯೆಜೆರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. 26ದೇವಾಲಯದ ದ್ವಾರಪಾಲಕರು
1ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ:ಕೋರಹೀಯನಾದ ಮೆಷೆಲೆಮ್ಯ ಎಂಬವನು, ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ.
2ಮೆಷೆಲೆಮ್ಯನ ಮಕ್ಕಳಲ್ಲಿ ಜೆಕೆರ್ಯನು ಚೊಚ್ಚಲ ಮಗ, ಎದೀಯಯೇಲನು ಎರಡನೆಯವನು, ಜೆಬೆದ್ಯನು ಮೂರನೆಯವನು, ಯೆತ್ನಿಯೇಲನು ನಾಲ್ಕನೆಯವನು.
3ಏಲಾಮನು ಐದನೆಯವನು, ಯೆಹೋಹಾನಾನನು ಆರನೆಯವನು, ಎಲ್ಯೆಹೋಯೇನೈ ಏಳನೆಯವನು.4ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು, ಯೆಹೋಜಾಬಾದನು ಎರಡನೆಯವನು. ಯೋವಾಹನು ಮೂರನೆಯವನು, ಸಾಕಾರನು ನಾಲ್ಕನೆಯವನು, ನೆತನೇಲನು ಐದನೆಯವನು,
5ಅಮ್ಮೀಯೇಲನು ಆರನೆಯವನು, ಇಸ್ಸಾಕಾರನು ಏಳನೆಯವನು, ಪೆಯುಲ್ಲೆತೈಯು ಎಂಟನೆಯವನು. ಓಬೇದೆದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನಷ್ಟೆ.6ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.7ಅವರು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್ ಮತ್ತು ಎಲ್ಜಾಬಾದ್. ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬುವವರು ಇವರ ಸಹೋದರರು.
8ಇವರೆಲ್ಲರೂ ಓಬೇದೆದೋಮನ ಸಂತಾನದವರು. ಇವರು, ಇವರ ಮಕ್ಕಳು ಸಮರ್ಥರೂ, ಸೇವೆಯಲ್ಲಿ ಗಟ್ಟಿಗರೂ ಆಗಿದ್ದವರೂ. ಇವರೂ ಇವರ ಸಹೋದರರೂ ಕೂಡಿ ಅರವತ್ತೆರಡು ಜನರು.9ಮೆಷೆಲೆಮ್ಯನ ಮಕ್ಕಳೂ ಮತ್ತು ಸಹೋದರರೂ ಹದಿನೆಂಟು ಜನರು. ಇವರೂ ಸಮರ್ಥರಾಗಿದ್ದರು.10ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬುವವನು ಪ್ರಧಾನನಾಗಿದ್ದನು. ಇವನು ಚೊಚ್ಚಲ ಮಗನಲ್ಲದಿದ್ದರೂ ಅವನ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇಮಿಸಿದನು.11ಹಿಲ್ಕೀಯನು ಎರಡನೆಯವನು, ಟೆಬಲ್ಯನು ಮೂರನೆಯವನು, ಜೆಕರ್ಯನು ನಾಲ್ಕನೆಯವನು. ಹೋಸನ ಮಕ್ಕಳು ಸಹೋದರರೂ ಒಟ್ಟಿಗೆ ಹದಿಮೂರು ಜನರು.12ಈ ದ್ವಾರಪಾಲಕರ ವರ್ಗಗಳು ಪ್ರಧಾನಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು.13ಅವರು ಕನಿಷ್ಠ ಕುಟುಂಬವೆಂದೂ, ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು.14ಪೂರ್ವ ದಿಕ್ಕಿನ ಕಾವಲಿಗೆ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತು. ಬಹು ವಿವೇಕವುಳ್ಳ ಸಲಹೆಗಾರನಾಗಿರುವ ಅವನ ಮಗನಾದ ಜೆಕೆರ್ಯನ ಹೆಸರಿಗೆ ಉತ್ತರ ದಿಕ್ಕಿನ ಚೀಟು ಬಿದ್ದಿತು.15ಓಬೇದೆದೋಮನಿಗೆ ದಕ್ಷಿಣದ ಬಾಗಿಲು, ಅವನ ಮಕ್ಕಳಿಗೆ ಉಗ್ರಾಣ ಮಂದಿರವೂ,16ಶುಪ್ಪೀಮ್ ಮತ್ತು ಹೋಸ ಎಂಬುವರಿಗೆ ಪಶ್ಚಿಮದ ಬಾಗಿಲೂ ಅದರ ಸಮೀಪದಲ್ಲಿರುವ ಶಲ್ಲೆಕೆತ್ ಎಂಬ ಬಾಗಿಲು ಚೀಟಿನಿಂದ ನೇಮಕವಾದವು. ಶೆಲ್ಲೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ.17ಲೇವಿಯರಲ್ಲಿ ಪ್ರತಿದಿನವೂ ಪೂರ್ವದಿಕ್ಕಿನ ಬಾಗಿಲನ್ನು ಆರು ಜನರು, ದಕ್ಷಿಣ ಬಾಗಿಲನ್ನು ನಾಲ್ಕು ಜನರು, ಉಗ್ರಾಣ ಮಂದಿರದ ಎರಡು ಬಾಗಿಲನ್ನು ಇಬ್ಬಿಬ್ಬರು,18ಪರ್ಬರೆಂಬ ಕಟ್ಟಡವಿರುವ ಪಶ್ಚಿಮ ದಿಕ್ಕಿನ ದಾರಿ ಬಾಗಿಲನ್ನು ನಾಲ್ಕು ಜನರು, ಪರ್ಬರನ್ನು ಇಬ್ಬರು ಕಾಯುತ್ತಿದ್ದರು.19ಕೋರಹೀಯರ ಮತ್ತು ಮೆರಾರೀಯರ ದ್ವಾರಪಾಲಕರ ವರ್ಗಗಳು ಇವೇ.ದೇವಾಲಯ ಭಂಡಾರದ ಖಜಾಂಚಿಗಳು ಮತ್ತು ಇತರ ಅಧಿಕಾರಿಗಳು
20ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.21ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಪ್ರಧಾನರಲ್ಲಿ ಯೆಹೀಯೇಲೀ ಮತ್ತು ಅವನ ಮಕ್ಕಳು,22ಯೆಹೀಯೇಲ್ಯರಾದ ಜೇತಾಮನೂ ಮತ್ತು ಅವನ ತಮ್ಮನಾದ ಯೋವೇಲನು ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು.23ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್,24ಇವರ ಸಂತಾನದವರಲ್ಲಿ ಗೇರ್ಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನಾಗಿದ್ದನು.25ಎಲೀಯೆಜೆರನ ಮಗ ರೆಹಬ್ಯ,ರೆಹಬ್ಯನ ಮಗ ಯೆಶಾಯ
ಯೆಶಾಯನ ಮಗ ಯೋರಾಮ
ಯೋರಾಮನ ಮಗ ಜಿಕ್ರೀ
ಜಿಕ್ರೀಯನ ಮಗ ಶೆಲೋಮೋತನು.
26ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು.27ಇವರು ಯೆಹೋವನ ಆಲಯದ ವೃದ್ಧಿಗೋಸ್ಕರ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಯೆಹೋವನಿಗೆಂದು ಮುಡುಪಾಗಿ ಇಟ್ಟರು.28ಇದಲ್ಲದೆ ದೇವ ದರ್ಶಿಯಾದ ಸಮುವೇಲನೂ, ಕೀಷನ ಮಗನಾದ ಸೌಲನೂ, ನೇರನ ಮಗನಾದ ಅಬ್ನೇರನೂ, ಚೆರೂಯಳ ಮಗನಾದ ಯೋವಾಬನೂ ಹಾಗೆಯೇ ಮಾಡಿದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು.29ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು.30ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವೆಯ ಎಲ್ಲಾ ಕಾರ್ಯಗಳನ್ನೂ ಮತ್ತು ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಜನರು.31ದಾವೀದನ ಆಳ್ವಿಕೆಯ ನಲವತ್ತನೆಯ ವರ್ಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆಸಿದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಿಗೆ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು.32ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವೀದನು ರೂಬೇನ್, ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು. 27ಸೈನಿಕರ ವರ್ಗಗಳು
1ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ:ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.
2ಪೆರೆಚನ ಸಂತಾನದವನೂ, ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕನು.3ಇವನು ಮೊದಲನೆಯ ತಿಂಗಳಿನ ಸೈನ್ಯಾಧಿಪತಿಯ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವೆ ಮಾಡತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.4ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು. ಆ ವರ್ಗದಲ್ಲಿ ಮಿಕ್ಲೋತನೆಂಬವನು ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.5ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕನು. ಮೂರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.6ಈ ಬೆನಾಯನು ಮೂವತ್ತು ಜನರಲ್ಲಿ ಪ್ರಸಿದ್ಧನಾದ ಯುದ್ಧವೀರನೂ ಅವರ ಮುಖ್ಯಸ್ಥನೂ ಆಗಿದ್ದನು. ಅವನ ವರ್ಗದಲ್ಲಿ ಅವನ ಮಗನಾದ ಅಮ್ಮೀಜಾಬಾದನು ಇದ್ದನು.7ಯೋವಾಬನ ತಮ್ಮನಾದ ಅಸಾಹೇಲನು. ಅವನು ಸತ್ತ ನಂತರ ಅವನ ಮಗನಾದ ಜೆಬದ್ಯನು ನಾಲ್ಕನೆಯ ವರ್ಗದ ನಾಯಕನು. ನಾಲ್ಕನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.8ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕನು. ಐದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.9ತೆಕೋವಿನ ಇಕ್ಕೇಷನ ಮಗನಾದ ಈರ ಎಂಬುವನು ಆರನೆಯ ವರ್ಗದ ನಾಯಕನು. ಆರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.10ಎಫ್ರಾಯೀಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕನು. ಏಳನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.11ಹುಷ ಊರಿನ ಜೆರಹೀಯನಾದ ಸಿಬ್ಬೆಕೈಯು ಎಂಟನೆಯ ವರ್ಗದ ನಾಯಕನು. ಎಂಟನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.12ಬೆನ್ಯಾಮೀನ್ ಕುಲದ ಅನತೋತ್ ಊರಿನವನಾದ ಅಬೀಯೆಜೆರನು ಒಂಬತ್ತನೆಯ ವರ್ಗದ ನಾಯಕನು. ಒಂಬತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.13ನೆಟೋಫ ಊರಿನವನಾದ ಜೆರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕನು. ಹತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.14ಎಫ್ರಾಯೀಮ್ ಕುಲದ ಪಿರ್ರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕನು. ಹನ್ನೊಂದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.15ನೆಟೋಫ ಊರಿನವನಾದ ಒತ್ನೀಯೇಲನ ಸಂತಾನದವನಾದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕನು. ಹನ್ನೆರಡನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.ಕುಲ ಪ್ರಭುಗಳು
16ಇಸ್ರಾಯೇಲಿನ ಕುಲ ಪ್ರಭುಗಳು: ರೂಬೇನ್ಯರಲ್ಲಿ ಜಿಕ್ರೀಯ ಮಗನಾದ ಎಲೀಯೆಜೆರನು; ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಯನು;17ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಯ; ಆರೋನ್ಯರಲ್ಲಿ ಚಾದೋಕ್;18ಯೆಹೂದ್ಯರಲ್ಲಿ ದಾವೀದನ ಅಣ್ಣನಾದ ಎಲೀಹು; ಇಸ್ಸಾಕಾರ್ಯರಲ್ಲಿ ಮೀಕಾಯೇಲನ ಮಗನಾದ ಒಮ್ರಿ;19ಜೆಬುಲೂನ್ಯರಲ್ಲಿ ಓಬದ್ಯನ ಮಗನಾದ ಇಷ್ಮಾಯ; ನಫ್ತಾಲ್ಯರಲ್ಲಿ ಅಜ್ರೀಯೇಲನ ಮಗನಾದ ಯೆರೀಮೋತ್;20ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯ; ಮನಸ್ಸೆಯ ಅರ್ಧ ಕುಲದವರಲ್ಲಿ ಪೆದಾಯನ ಮಗನಾದ ಯೋವೇಲ್;21ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಕುಲದವರಲ್ಲಿ ಜೆಕರ್ಯಯನ ಮಗನಾದ ಇದ್ದೋ; ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗನಾದ ಯಗಸೀಯೇಲ್;22ದಾನ್ಯರಲ್ಲಿ ಯೆರೋಹಾಮನ ಮಗನಾದ ಅಜರೇಲನು ಇವರೇ.23ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.24ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದ ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ಇತಿಹಾಸ ಗ್ರಂಥದಲ್ಲಿ ದಾಖಲಿಸಲಿಲ್ಲ.ಅರಸನ ಆಸ್ತಿಯ ಮೇಲ್ವಿಚಾರಕರು
25ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳನ್ನು ಅದೀಯೇಲನ ಮಗನಾದ ಅಜ್ಮಾವೆತ್, ಹೊಲದಲ್ಲಿಯೂ ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆ ಇದ್ದ ಉಗ್ರಾಣಗಳನ್ನು ಉಜ್ಜೀಯನ ಮಗನಾದ ಯೋನಾತಾನನು ಇದ್ದನು.26ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಕೆಲೂಬನ ಮಗನಾದ ಎಜ್ರೀ ಇದ್ದನು.27ದ್ರಾಕ್ಷಿ ತೋಟಗಳ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳನ್ನು ಶಿಪ್ಮೀಯನಾದ ಜಬ್ದೀ ಇದ್ದನು.28ಎಣ್ಣೇ ಮರದ ತೋಪುಗಳನ್ನೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳನ್ನು ಗೆದೇರಾ ಊರಿನವನಾದ ಬಾಳ್ಹಾನಾನ್ ಮತ್ತು ಎಣ್ಣೆಯ ಉಗ್ರಾಣಗಳನ್ನು ನೋಡಿಕೊಳ್ಳಲು ಯೋವಾಷ್ ಇದ್ದನು.29ಶಾರೋನಿನಲ್ಲಿ ಮೇಯುವ ಹಸುಗಳನ್ನು ಶಾರೋನ್ಯನಾದ ಶಿಟ್ರೈ ಇದ್ದನು. ತಗ್ಗುಗಳಲ್ಲಿ ಮೇಯುವ ಹಸುಗಳನ್ನು ಅದ್ಲೈಯ ಮಗನಾದ ಶಾಫಾಟನು ಇದ್ದನು.30ಒಂಟೆಗಳನ್ನು ಇಷ್ಮಾಯೇಲ್ಯನಾದ ಓಬೀಲ್, ಹೆಣ್ಣುಕತ್ತೆಗಳನ್ನು ಮೇರೊನೋತ್ಯನಾದ ಯೆಹ್ದೆಯ.31ಆಡುಕುರಿಗಳನ್ನು ಹಗ್ರೀಯನಾದ ಯಾಜೀಜ್ ನೋಡಿಕೊಳ್ಳುತ್ತಿದ್ದರು.32ವಿವೇಕಿಯೂ, ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು, ಮಂತ್ರಿಯೂ ಹಕ್ಮೋನಿಯ ಮಗನಾದ ಯೆಹೀಯೇಲನು ರಾಜಪುತ್ರಪಾಲಕನೂ ಆಗಿದ್ದರು.33ಅಹೀತೋಫೆಲನು ಅರಸನ ಮಂತ್ರಿಯೂ, ಅರ್ಕೀಯನಾದ ಹೂಷೈಯು ಅರಸನ ಮಿತ್ರನಾಗಿದ್ದನು.34ಬೆನಾಯನ ಮಗನಾದ ಯೆಹೋಯಾದಾವನೂ, ಎಬ್ಯಾತಾರನೂ, ಅಹೀತೋಫೆಲನ ನಂತರದ ಉತ್ತರಾಧಿಕಾರಿಗಳು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು.
28ದೇವಾಲಯದ ನಿರ್ಮಾಣಕ್ಕೆ ದಾವೀದನ ಯೋಜನೆ
1ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.2ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, <<ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.3ಆಗ ದೇವರು ನನಗೆ, <ನೀನು ಮಹಾಯುದ್ಧಗಳನ್ನು ಮಾಡಿ ಬಹಳ ರಕ್ತವನ್ನು ಸುರಿಸಿದವನು, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬಾರದು> ಎಂದು ಹೇಳಿದನು.4ಇಸ್ರಾಯೇಲರ ದೇವರಾದ ಯೆಹೋವನು ತನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲರ ಅರಸನಾಗುವುದಕ್ಕೆ ಆರಿಸಿಕೊಂಡನು. ಆತನು ಯೆಹೂದ ಕುಲವು ರಾಜಕುಲವಾಗಬೇಕೆಂದು ನೇಮಿಸಿ, ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದನು.5ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.6ಆತನು ನನಗೆ, <ನಿನ್ನ ಮಗನಾದ ಸೊಲೊಮೋನನೇ ನನ್ನ ಆಲಯವನ್ನೂ, ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ. ನಾನು ಅವನಿಗೆ ತಂದೆಯಾಗಿರುವೆನು.7ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಕೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು ಎಂದು ಹೇಳಿದ್ದಾನೆ.>8ಆದುದರಿಂದ ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಸಭೆಯಾದ ಸಮಸ್ತ ಇಸ್ರಾಯೇಲರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವತ್ತಾಗಿರುವುದು.9ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.10ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈರ್ಯದಿಂದ ಕೆಲಸ ಮಾಡು>> ಎಂಬುದೇ.ಸೊಲೊಮೋನನಿಗೆ ದೇವಾಲಯದ ನಕ್ಷೆಯನ್ನು ಕೊಟ್ಟದ್ದು
11ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕಟ್ಟಡಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನ ಮಂದಿರ ಇವುಗಳ ನಕ್ಷೆಯನ್ನು ಕೊಟ್ಟನು.12ಇವನು ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳು, ಭಂಡಾರಗಳು ಇವುಗಳ ವಿಷಯವಾಗಿಯೂ,13ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಆಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ, ಆರಾಧನೆಯ ಎಲ್ಲಾ ಸಾಮಗ್ರಿಗಳು14ಇವುಗಳ ವಿಷಯವಾಗಿ ಪವಿತ್ರಾತ್ಮನು ತನ್ನ ಮನಸ್ಸಿನಲ್ಲಿ ಕೊಟ್ಟಿದ್ದ ಯೋಜನೆಗಳನ್ನು ವಿವರಿಸಿದನು.15ಇದಲ್ಲದೆ ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗವಾಗಬೇಕಾದ ಎಲ್ಲಾ ಸಾಮಾನುಗಳ ಬೆಳ್ಳಿ ಬಂಗಾರದ ತೂಕ, ಅಂದರೆ ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,16ಮೀಸಲು ರೊಟ್ಟಿಗಳನ್ನಿಡುವ ಬಟ್ಟಲುಗಳು ಹಾಗೂ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ,17ಚೊಕ್ಕ ಬಂಗಾರದ ಮುಳ್ಳು ಬೋಗುಣಿ, ಹೂಜಿಗಳ ಮತ್ತು ಬೆಳ್ಳಿ ಬಂಗಾರದ ಆಯಾ ಪಾತ್ರೆಗಳ ತೂಕ,18ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕ ಬಂಗಾರದ ತೂಕ ಎಷ್ಟೆಷ್ಟಾಗಿರಬೇಕೆಂಬುದನ್ನು ವಿವರಿಸಿ, ರೆಕ್ಕೆಗಳನ್ನು ಹರಡಿಕೊಂಡು ಯೆಹೋವನ ಒಡಂಬಡಿಕೆ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು.19ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು.20ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, <<ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.21ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ದೇವಾಲಯಕ್ಕೆ ಸಂಬಂಧಪಟ್ಟ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನು ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸು ಉಳ್ಳವರು ನಿನ್ನ ಹತ್ತಿರ ಬೆಂಬಲವಾಗಿ ಇರುತ್ತಾರೆ. ಅಧಿಪತಿಗಳೂ, ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ಒಳಗಾಗುವರು>> ಎಂದು ಹೇಳಿದನು.
29ದೇವಾಲಯಕ್ಕಾಗಿ ಕೊಟ್ಟ ಕಾಣಿಕೆಗಳು
1ತರುವಾಯ ಅರಸನಾದ ದಾವೀದನು, <<ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.2ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ.3ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೊಸ್ಕರ ನನ್ನ ಸ್ವಂತ ಸೊತ್ತಿನಿಂದ4ಮೂರು ಸಾವಿರ ತಲಾಂತು ಓಫೀರ್ ದೇಶದ ಬಂಗಾರವನ್ನೂ, ಏಳು ಸಾವಿರ ತಲಾಂತು ಚೊಕ್ಕ ಬೆಳ್ಳಿಯನ್ನೂ ಕೊಡುತ್ತೇನೆ. ಈ ಬೆಳ್ಳಿ ಬಂಗಾರದಿಂದ ಆಲಯದ ಗೋಡೆಗಳನ್ನು ಹೊದಿಸಬೇಕು.5ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿ ಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ಹೊತ್ತು ಉದಾರಹಸ್ತದಿಂದ ಯೆಹೋವನಿಗೋಸ್ಕರ ಕಾಣಿಕೆಯನ್ನರ್ಪಿಸುವುದಕ್ಕೆ ಯಾರಿಗೆ ಮನಸ್ಸಿದೆಯೋ ಅವರು ಮುಂದೆ ಬರಲಿ>> ಎಂದು ನೆರೆದ ಸಭೆಗೆ ಹೇಳಿದನು.6ಆಗ ಇಸ್ರಾಯೇಲ್ ಗೋತ್ರಕುಟುಂಬಗಳ ಪ್ರಧಾನರೂ, ಸಹಸ್ರಾಧಿಪತಿಗಳೂ, ಅರಸನ ಕೆಲಸದವರ ಮುಖ್ಯಸ್ಥರೂ, ದೇವಾಲಯದ ಕೆಲಸಕ್ಕೋಸ್ಕರ ಸ್ವ ಇಚ್ಛೆಯಿಂದ7ಐದು ಸಾವಿರ ತಲಾಂತು, ಹತ್ತು ಸಾವಿರ ಪವನು ಬಂಗಾರವನ್ನೂ , ಹತ್ತು ಸಾವಿರ ತಲಾಂತು ಬೆಳ್ಳಿಯನ್ನೂ , ಹದಿನೆಂಟು ಸಾವಿರ ತಲಾಂತು ತಾಮ್ರವನ್ನೂ, ಒಂದು ಲಕ್ಷ ತಲಾಂತು ಕಬ್ಬಿಣವನ್ನೂ ಕೊಟ್ಟರು.8ರತ್ನಗಳನ್ನು ಹೊಂದಿದ್ದವರು ಅವುಗಳನ್ನು ಯೆಹೋವನ ಆಲಯದ ಭಂಡಾರಕ್ಕೋಸ್ಕರ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು.9ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.ದಾವೀದನ ಪ್ರಾರ್ಥನೆ
10ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, <<ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.11ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.12ಪ್ರಭಾವ ಐಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ. ನೀನು ಸರ್ವಾಧಿಕಾರಿಯು. ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ. ಎಲ್ಲಾ ಮಹಿಮೆಗೂ, ಶಕ್ತಿಗೂ ನೀನೇ ಮೂಲನು.13ಆದುದರಿಂದ ನಮ್ಮ ದೇವರೇ ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ, ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.14ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.15ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.16ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ಆಲಯ ಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು. ಇವೆಲ್ಲಾ ನಿನ್ನವೇ.17ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.18ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.19ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ, ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು>> ಎಂದು ಪ್ರಾರ್ಥಿಸಿದನು.20ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, <<ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ>> ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು.21ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿನದ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು.ಸೊಲೊಮೋನನ ಪಟ್ಟಾಭಿಷೇಕ
22ಜನರು ದಾವೀದನ ಮಗನಾದ ಸೊಲೊಮೋನನನ್ನು ಪುನಃ ಅರಸನನ್ನಾಗಿ ಆರಿಸಿಕೊಂಡು ಅವನನ್ನು ರಾಜನನ್ನಾಗಿಸಿವುದಕ್ಕೂ, ಚಾದೋಕನನ್ನು ಯಾಜಕನಾಗುವುದಕ್ಕೂ ಅಭಿಷೇಕಿಸಿ ಯೆಹೋವನಿಗೋಸ್ಕರ ಪ್ರತಿಷ್ಠಿಸಿದರು.23ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.24ಎಲ್ಲಾ ಅಧಿಪತಿಗಳೂ ದಂಡಿನವರೂ ಅರಸನಾದ ದಾವೀದನ ಎಲ್ಲಾ ಮಕ್ಕಳೂ ಅವನಿಗೆ ಅಧೀನರಾದರು.25ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.ದಾವೀದನ ಮರಣ
26ಹೀಗೆ ಇಷಯನ ಮಗನಾದ ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಆಳ್ವಿಕೆ ಮಾಡಿದನು.27ಅವನು ಹೆಬ್ರೋನಿನಲ್ಲಿ ಏಳು ವರ್ಷವೂ, ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷವೂ ಒಟ್ಟಿಗೆ ನಲ್ವತ್ತು ವರ್ಷ ಆಳಿದನು.28ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.29ದಾವೀದನ ಪೂರ್ವೋತ್ತರಚರಿತ್ರೆ ಅವನ ಆಳ್ವಿಕೆ, ಪರಾಕ್ರಮ ಅವನಿಗೂ ಇಸ್ರಾಯೇಲರಿಗೂ, ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತ.30ದೇವದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ, ದೇವದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿಯೂ ಬರೆದಿರುತ್ತದೆ.
2 ಪೂರ್ವಕಾಲವೃತ್ತಾಂತ
1ಸೊಲೊಮೋನನಿಗೆ ಯೆಹೋವನು ಕೊಟ್ಟ ವಿಶೇಷಜ್ಞಾನ
1ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.2ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಗೋತ್ರ ಪ್ರಧಾನರಾದವರೊಂದಿಗೂ, ಇಸ್ರಾಯೇಲ್ ಪ್ರಭುಗಳೊಂದಿಗೂ ಮಾತನಾಡಿದನು.3ಅವನ ಸಂಗಡ ಇದ್ದ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿರುವ ಪೂಜಾಸ್ಥಳಕ್ಕೆ ಹೋದನು. ಏಕೆಂದರೆ ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿದ ದೇವದರ್ಶನದ ಗುಡಾರವು ಅಲ್ಲಿತ್ತು.4ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತಾನು ಅದನ್ನಿರಿಸಲು ಸಿದ್ಧ ಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕಾಗಿ ಗುಡಾರವನ್ನು ಮಾಡಿಸಿದ್ದನು.5ಇದಲ್ಲದೆ ಹೂರನ ಮಗನಾದ ಊರಿಯ, ಈತನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು.6ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.7ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು ಅವನಿಗೆ, <<ನಿನಗೆ, ಯಾವ ವರ ಬೇಕು ಕೇಳಿಕೋ>> ಎಂದು ಹೇಳಲು8ಸೊಲೊಮೋನನು ದೇವರಿಗೆ, <<ನೀನು ನನ್ನ ತಂದೆಯಾದ ದಾವೀದನಿಗೆ ಮಹಾ ದಯೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಅರಸನಾಗುವಂತೆ ಮಾಡಿದೆ.9ಈಗ ಯೆಹೋವನಾದ ದೇವರೇ, ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವು ನೆರವೇರಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯವಾದ ಜನಾಂಗದವರಿಗೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀ.10ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು>> ಎಂದು ಕೇಳಿದನು.11ಆಗ ದೇವರು ಸೊಲೊಮೋನನಿಗೆ, <<ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ, ಧನವನ್ನೂ, ಐಶ್ವರ್ಯವನ್ನೂ, ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ.12ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು>> ಎಂದನು.13ಆನಂತರ ಸೊಲೊಮೋನನು ದೇವದರ್ಶನದ ಗುಡಾರವನ್ನು ಬಿಟ್ಟು, ಗಿಬ್ಯೋನಿನಲ್ಲಿರುವ ಪೂಜಾಸ್ಥಳದಿಂದ ಯೆರೂಸಲೇಮಿಗೆ ಬಂದು, ಇಸ್ರಾಯೇಲ್ ರಾಜ್ಯವನ್ನು ಆಳಿದನು.ಸೊಲೊಮೋನನ ವೈಭವ
14ಅರಸನಾದ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಸಾವಿರದ ನಾನೂರು ರಥಗಳೂ ಮತ್ತು ಹನ್ನೆರಡು ಸಾವಿರ ರಾಹುತರೂ ಅವನಿಗೆ ಇದ್ದರು. ಇವರನ್ನು ರಥದ ಪಟ್ಟಣಗಳಲ್ಲಿಯೂ ಕೆಲವರನ್ನು ಯೆರೂಸಲೇಮಿನಲ್ಲಿ ಅರಸನೊಂದಿಗೂ ಇರಿಸಿದನು. ಉಳಿದವುಗಳನ್ನು ರಥಗಳಿಗಾಗಿ ನೇಮಿಸಿದ ಪಟ್ಟಣದಲ್ಲಿ ಇರಿಸಿದನು.15ಅರಸನು ಯೆರೂಸಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತ್ತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು.16ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ್ಯ ದೇಶದವುಗಳಾಗಿದ್ದವು. ಅವನ ವರ್ತಕರು ಅವುಗಳನ್ನು ಹಿಂಡು ಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.17ರಥಕ್ಕೆ ಆರುನೂರು ಬೆಳ್ಳಿ ನಾಣ್ಯಗಳಂತೆ, ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳಂತೆ ಕೊಟ್ಟು, ರಥಗಳನ್ನೂ, ಕುದುರೆಗಳನ್ನೂ ಐಗುಪ್ತ್ಯ ದೇಶದಿಂದ ತರಿಸುತ್ತಿದ್ದರು. ಇವುಗಳನ್ನು ಹಿತ್ತಿಯರ ಮತ್ತು ಅರಾಮ್ಯರ ಅರಸರ ಮುಖಾಂತರವೇ ತರಿಸುತ್ತಿದ್ದರು.
2ದೇವಾಲಯದ ನಿರ್ಮಾಣಕ್ಕೆ ಸಿದ್ಧತೆ
1ಸೊಲೊಮೋನನು ಯೆಹೋವನಿಗೋಸ್ಕರ ಒಂದು ಆಲಯವನ್ನೂ ಮತ್ತು ತನಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸಲು ತೀರ್ಮಾನಿಸಿದನು.2ಅದಕ್ಕಾಗಿ ಹೊರೆ ಹೊರುವ ಎಪ್ಪತ್ತು ಸಾವಿರ ಜನರನ್ನು, ಎಂಭತ್ತು ಸಾವಿರ ಜನರು ಕಲ್ಲುಗಣಿಗಳಲ್ಲಿ ಕೆಲಸ ಮಾಡುವವರನ್ನು, ಇವರ ಮೇಲ್ವೀಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿ ಮೇಲ್ವೀಚಾರಕರನ್ನು ಸೊಲೊಮೋನನು ನೇಮಿಸಿದನು.3ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ , <<ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.4ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.5ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು. ಏಕೆಂದರೆ ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.6ಆದರೆ ಆತನಿಗೋಸ್ಕರ ಆಲಯವನ್ನು ಕಟ್ಟುವುದಕ್ಕೆ ಶಕ್ತರಾರು! ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಾಗ ಆತನಿಗಾಗಿ ಆಲಯ ಕಟ್ಟಲು ಸಾಧ್ಯವಿಲ್ಲ. ಆತನ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು!7ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ.8ಲೆಬನೋನಿನಿಂದ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ನನ್ನ ಬಳಿಗೆ ಕಳುಹಿಸಬೇಕು. ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ನಿನ್ನ ಆಳುಗಳು ಸಮರ್ಥರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಇರುವರು.9ನಾನು ಬೃಹದಾಕಾರವಾದ, ಭವ್ಯವಾದ ದೇವಾಲಯವನ್ನು ಕಟ್ಟಿಸುವುದರಿಂದ ನನಗೋಸ್ಕರ ಹೆಚ್ಚು ಮರಗಳನ್ನು ಸಿದ್ಧಪಡಿಸಬೇಕು.10ಮರ ಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು>> ಎಂದನು.11ತೂರಿನ ಅರಸನಾದ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ತನ್ನ ಒಪ್ಪಿಗೆ ಸೂಚಿಸಿದನು. <<ಯೆಹೋವನು ತನ್ನ ಪ್ರಜೆಗಳನ್ನು ಪ್ರೀತಿಸುವವನಾಗಿರುವುದರಿಂದ ನಿನ್ನನ್ನು ಅವರ ಅರಸನನ್ನಾಗಿ ನೇಮಿಸಿದ್ದಾನೆ.>>12ಇದಲ್ಲದೆ, <<ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಾಯೇಲ್ ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ, ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ, ವಿವೇಕವುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದರಿಂದ ಆತನಿಗೆ ಸ್ತೋತ್ರವಾಗಲಿ.13ಈಗ ನಾನು ಜ್ಞಾನಿಯು, ಕಲಾ ಪ್ರವೀಣನೂ ಆದ ಹೂರಾಮಾಬೀ ಎಂಬುವವನನ್ನು ಕಳುಹಿಸುತ್ತೇನೆ.14ಅವನು ದಾನ್ ಕುಲದ ಸ್ತ್ರೀಯರಲ್ಲಿ ಒಬ್ಬಳ ಮಗನಾಗಿದ್ದಾನೆ. ಅವನ ತಂದೆ ತೂರಿನವನು. ಅವನು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ, ಕಡುಗೆಂಪುವರ್ಣ ನೀಲರಕ್ತವರ್ಣಗಳುಳ್ಳ ಅಮೂಲ್ಯರತ್ನಗಳನ್ನು ಕೆತ್ತುವುದಕ್ಕೂ, ನಯವಾದ ನಾರು ವಸ್ತ್ರಗಳನ್ನು ನೇಯುವುದಕ್ಕೂ, ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಕೆಲಸಗಳನ್ನು ನಡಿಸುವುದಕ್ಕೂ, ಎಲ್ಲಾ ತರದ ಕೆತ್ತನೆಯ ಕೆಲಸವನ್ನು ಮಾಡುವುದಕ್ಕೂ ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಚಮತ್ಕಾರವಾದ ಕೆಲಸಗಳನ್ನು ನಡಿಸುವುದಕ್ಕೂ ಸಮರ್ಥನು, ನೀನೂ ನಿನ್ನ ತಂದೆಯು, ನನ್ನ ಒಡೆಯನು ಆದ ದಾವೀದನೂ ಗೊತ್ತುಮಾಡಿದ ಕುಶಲಕರ್ಮಿಗಳೊಡನೆ ಅವನು ಕೆಲಸ ಮಾಡಲಿ15ಈಗ ನನ್ನ ಒಡೆಯನು ಹೇಳಿದ ಮೇರೆಗೆ ಆ ಗೋದಿಯನ್ನು, ಜವೆಗೋದಿಯನ್ನು, ಎಣ್ಣೆಯನ್ನು, ದ್ರಾಕ್ಷಾರಸವನ್ನು ತನ್ನ ಸೇವಕರಿಗೆ ಕಳುಹಿಸಿಕೊಡಲಿ.16ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು>> ಎಂಬುದಾಗಿ ಉತ್ತರ ಕೊಟ್ಟನು.17ಆಮೇಲೆ ಸೊಲೊಮೋನನು ತನ್ನ ತಂದೆಯಾದ ದಾವೀದನು ಮಾಡಿಸಿದ ಜನಗಣತಿಯ ಆಧಾರದ ಮೇರೆಗೆ, ಇಸ್ರಾಯೇಲ್ ದೇಶದಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕ ಮಾಡಿದಾಗ ಒಂದು ಲಕ್ಷದ ಐವತ್ತು ಮೂರು ಸಾವಿರದ ಆರುನೂರು ಮಂದಿ ಸಿಕ್ಕಿದರು.18ಅವರಲ್ಲಿ ಹೊರೆಹೊರುವುದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ, ಕಲ್ಲುಗಣಿಗಳಲ್ಲಿ ಕೆಲಸಮಾಡುವುದಕ್ಕಾಗಿ ಎಂಭತ್ತು ಸಾವಿರ ಮಂದಿಯನ್ನೂ, ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇಮಿಸಿದನು.
3ದೇವಾಲಯವನ್ನು ಕಟ್ಟಿಸಿದ್ದು
1ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ, ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.2ಸೊಲೊಮೋನನು ತನ್ನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಅದನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು.3ಸೊಲೊಮೋನನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದವು ಮೊದಲಿದ್ದ ಮೊಳದ ಪ್ರಕಾರ ಅರುವತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವು ಆಗಿತ್ತು.4ದೇವಾಲಯದ ಮುಂಭಾಗದಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ ಆಗಿತ್ತು. ಸೊಲೊಮೋನನು ಅದರ ಒಳಭಾಗವನ್ನು ಶುದ್ಧ ಬಂಗಾರದ ತಗಡಿನಿಂದ ಹೊದಿಸಿದನು.5ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದ ಮುಚ್ಚಿ, ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಆದರ ಹಲಗೆಗಳ ಮೇಲೆ ಖರ್ಜೂರದ ಮರಗಳನ್ನೂ ಬಳ್ಳಿಗಳನ್ನೂ ಸರಪಣಿಗಳನ್ನು ಕೆತ್ತಿಸಿದನು.6ಅಮೂಲ್ಯವಾದ ರತ್ನದ ಕಲ್ಲುಗಳಿಂದ ಅಲಯವನ್ನು ಅಲಂಕರಿಸಿದನು. ಆದರ ಬಂಗಾರವು ಪರ್ವಯಿಮ್ ದೇಶದ ಬಂಗಾರವಾಗಿತ್ತು.7ಹೀಗೆ ಆಲಯದಲ್ಲಿನ ತೊಲೆಗಳನ್ನೂ, ಹೊಸ್ತಿಲುಗಳನ್ನು, ಗೋಡೆಗಳನ್ನೂ, ಬಾಗಿಲುಗಳನ್ನೂ ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು.8ಇದಲ್ಲದೆ ಅವನು ಮಹಾಪರಿಶುದ್ಧ ಸ್ಥಳವನ್ನು ಕಟ್ಟಿಸಿದನು. ಅದರ ಉದ್ದವು, ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ; ಅದರ ಅಗಲವೂ ಇಪ್ಪತ್ತು ಮೊಳವಾಗಿತ್ತು. ಅದನ್ನು ಆರುನೂರು ತಲಾಂತು ಚೊಕ್ಕ ಬಂಗಾರದಿಂದ ಹೊದಿಸಿದನು.9ಬಂಗಾರದ ಮೊಳೆಗಳ ತೂಕ ಐವತ್ತು ತೊಲವಾಗಿತ್ತು. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.10ಮಹಾಪರಿಶುದ್ಧ ಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿದನು; ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.11ಕೆರೂಬಿಗಳ ರೆಕ್ಕೆಗಳು ಒಟ್ಟು ಇಪ್ಪತ್ತು ಮೊಳ ಉದ್ದವಾಗಿದ್ದವು. ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು; ಐದು ಮೊಳ ಉದ್ದವಾದ ಇನ್ನೊಂದು ರೆಕ್ಕೆಯು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.12ಅದರಂತೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳ ಉದ್ದವಾಗಿದ್ದು, ಅದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು.; ಇನ್ನೊಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.13ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದಕ್ಕೆ ಚಾಚಿಕೊಂಡಿದ್ದವು. ಕೆರೂಬಿಗಳು ತಮ್ಮ ಕಾಲುಗಳ ಮೇಲೆ ನಿಂತುಕೊಂಡು, ಪರಿಶುದ್ಧ ಸ್ಥಳದ ಕಡೆಗೆ ಮುಖಮಾಡಿದ್ದವು.14ಸೊಲೊಮೋನನು ಪರದೆಯನ್ನು ನೀಲ, ಧೂಮ್ರ, ರಕ್ತವರ್ಣಗಳುಳ್ಳ ನಯವಾದ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳ ಕಸೂತಿಯನ್ನು ಹಾಕಿಸಿದನು.15ಇದಲ್ಲದೆ ದೇವಾಲಯದ ಮುಂದೆ ಎರಡು ಸ್ತಂಭಗಳನ್ನು ನಿಲ್ಲಿಸಿದನು, ಅವು ಮೂವತ್ತೈದು ಮೊಳ (5.5 ಮೀಟರ್) ಎತ್ತರವಾಗಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಾಗಿದ್ದವು.16ಸೊಲೊಮೋನನು ಗರ್ಭಗೃಹದ ಸರಪಣಿಗಳಂತೆ ಹಾರಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕೆತ್ತಿಸಿ ಕಟ್ಟಿಸಿದನು.17ಸ್ತಂಭಗಳನ್ನು ದೇವಾಲಯದ ಮುಂಭಾಗದಲ್ಲಿ, ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ <<ಯಾಕೀನ್>> ಎಂದೂ ಎಡಗಡೆಯಿದ್ದ ಕಂಬಕ್ಕೆ <<ಬೋವಜ್>> ಎಂದೂ ಹೆಸರಿಟ್ಟನು.
4ದೇವಾಲಯದ ಸಾಮಾನುಗಳು
1ಇದಲ್ಲದೆ ಸೊಲೊಮೋನನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳವು ಆಗಿತ್ತು.2ಸೊಲೊಮೋನನು ಒಂದು ಕಂಚಿನ ಕಡಲು ಎಂಬ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರವು ಐದು ಮೊಳವಾಗಿಯೂ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.3ಅದರ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು. ಅವು ಒಂದೊಂದು ಮೊಳಕ್ಕೆ ಹತ್ತರಂತೆ ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯಲ್ಪಟ್ಟಿದ್ದವು.4ಅದು ಹನ್ನೆರಡು ಎರಕದ ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ, ಮೂರು ಪೂರ್ವ ದಿಕ್ಕಿಗೂ ಮುಖ ಮಾಡಿಕೊಂಡಿದ್ದವು. ಆ ಕಂಚಿನ ಕಡಲು ಪಾತ್ರೆ ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಭಾಗದಲ್ಲಿತ್ತು.5ಕಡಲಿನ ಪಾತ್ರೆಯು ನಾಲ್ಕು ಬೆರಳಿನಷ್ಟು ದಪ್ಪವಾಗಿತ್ತು. ಅದರ ಅಂಚುಪಾತ್ರೆಯ ಅಂಚಿನ ಹಾಗೆಯೂ ಅರಳಿದ ಕಮಲಪುಷ್ಪದ ಹಾಗೆ ಇತ್ತು. ಅದರೊಳಗೆ ಮೂರು ಸಾವಿರ ಕೊಳಗ ನೀರು ಹಿಡಿಯುತ್ತಿತ್ತು.6ಇದಲ್ಲದೆ ಅವನು ಹತ್ತು ಬೋಗುಣಿಗಳನ್ನು ಮಾಡಿಸಿ, ಅವುಗಳಲ್ಲಿ ಸರ್ವಾಂಗಹೋಮ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧ ಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ, ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಆದರೆ ಆ ಕಡಲಿನೊಳಗಿನ ನೀರು ಯಾಜಕರ ಸ್ನಾನಮಾಡಿ ತಮ್ಮನ್ನು ಶುದ್ಧಮಾಡಿಕೊಳ್ಳುವುದಕ್ಕಾಗಿ ಇತ್ತು.7ಅವನು ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿ, ಐದನ್ನು, ಎಡಗಡೆಯಲ್ಲಿಯೂ ಇರಿಸಿದನು.8ಹತ್ತು ಮೇಜುಗಳನ್ನು ಮಾಡಿಸಿ, ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.9ಇದಲ್ಲದೆ ಯಾಜಕರ ಪ್ರಾಕಾರವನ್ನೂ, ಮಹಾಪ್ರಾಕಾರವನ್ನೂ, ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಮಾಡಿಸಿದನು; ಅವುಗಳ ಬಾಗಿಲುಗಳನ್ನು ತಾಮ್ರದ ತಗಡಿನಿಂದ ಹೊದಿಸಿದನು.10ಕಡಲು ಎನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪೂರ್ವಭಾಗದ ಬಲಗಡೆಯಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು.11ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೊಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು.12ಎರಡು ಸ್ತಂಭಗಳು ಅವುಗಳ ಮೇಲಿರುವ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು,13ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡನ್ನು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು, ಪೀಠಗಳು,14ಅವುಗಳ ಮೇಲಣ ಬೋಗುಣಿಗಳು, ಕಡಲು ಎನಿಸಿಕೊಳ್ಳುವ ಎರಕದ ಪಾತ್ರೆ,15ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,16ಹಂಡೆ, ಸಲಿಕೆ, ಮುಳ್ಳುಸೌಟುಗಳು ಹೀಗೆ ಹೂರಾಮಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಆಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪ ಹಾಕಿದ ತಾಮ್ರದಿಂದ ಮಾಡಿ ಮುಗಿಸಿದನು.17ಅರಸನು ಯೊರ್ದನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಕುಲುಮೆಯ ಜೇಡಿಮಣ್ಣಿನ ಸ್ಥಳದಲ್ಲಿ ಎರಕ ಹೊಯ್ಯಿಸಿದನು.18ಹೀಗೆ ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದುದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬುದು ಗೊತ್ತಾಗದೆ ಹೋಯಿತು.19ಸೊಲೊಮೋನನು ಯೆಹೋವನ ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಾನುಗಳು ಯಾವುದೆಂದರೆ: ಬಂಗಾರದ ಧೂಪವೇದಿ, ನೈವೇದ್ಯ ರೊಟ್ಟಿಗಳನ್ನಿಡುವ ಮೇಜುಗಳು,20ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಟಾಲಂಕಾರವುಳ್ಳ ಬಂಗಾರದ ದೀಪ ಸ್ತಂಭಗಳು,21ಅವುಗಳ ದೀಪಗಳು, ಹೂವುಗಳು, ಹಣತೆಗಳು, ಇಕ್ಕಳಗಳು ಇವು ಸ್ವಚ್ಛ ಬಂಗಾರದಿಂದ ಮಾಡಿದವುಗಳಾಗಿದ್ದವು.22ಹಾಗೆಯೇ ಕತ್ತರಿಗಳನ್ನೂ, ಬೋಗುಣಿಗಳನ್ನೂ ಧೂಪಾರತಿಗಳನ್ನೂ, ಅಗ್ಗಿಷ್ಟಿಕೆಗಳನ್ನು, ದೇವಾಲಯದ ಮಹಾಪರಿಶುದ್ಧ ಸ್ಥಳಕ್ಕಾಗಿರುವ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು ಇವುಗಳೇ.
51ಹೀಗೆ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ, ತನ್ನ ತಂದೆಯಾದ ದಾವೀದನು ಯೆಹೋವನಿಗೆ ಪ್ರತಿಷ್ಠೆ ಮಾಡಿದ್ದ ಬೆಳ್ಳಿಯನ್ನು, ಬಂಗಾರವನ್ನೂ, ಎಲ್ಲಾ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.ಮಂಜೂಷದ ಪ್ರತಿಷ್ಠಾಪನೆ
2ಆಗ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೆಲ್ಲರನ್ನು, ಕುಲಾಧಿಪತಿಗಳೆಲ್ಲರನ್ನು ಹಾಗೂ ಇಸ್ರಾಯೇಲರ ಗಣ್ಯ ವ್ಯಕ್ತಿಗಳೆಲ್ಲರನ್ನು ಯೆರೂಸಲೇಮಿಗೆ ಕರೆಸಿಕೊಂಡನು.3ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗಾಗಿ ಅರಸನ ಬಳಿಗೆ ಒಟ್ಟಾಗಿ ಸೇರಿ ಬಂದರು.4ಇಸ್ರಾಯೇಲ್ಯರ ಹಿರಿಯರೆಲ್ಲರೂ ಕೂಡಿ ಬಂದಾಗ, ಲೇವಿಯರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.5ಯಾಜಕರಾದ ಲೇವಿಯರು ಒಡಂಬಡಿಕೆಯ ಮಂಜೂಷವನ್ನು, ದೇವದರ್ಶನದ ಗುಡಾರ, ಅದರಲ್ಲಿದ್ದ ಎಲ್ಲಾ ಪರಿಶುದ್ಧವಸ್ತುಗಳನ್ನೂ ಹೊತ್ತುಕೊಂಡು ತಂದರು.6ಅರಸನಾದ ಸೊಲೊಮೋನನೂ, ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಕೂಡಿಬಂದು, ಅಸಂಖ್ಯವಾದ ಕುರಿ, ದನಗಳನ್ನು ಯಜ್ಞವಾಗಿ ಅರ್ಪಿಸಿದರು.7ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿರಿಸಿದರು.8ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿಕೊಂಡಿದ್ದವು. ಆದುದರಿಂದ ಮಂಜೂಷವು ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.9ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇದೆ.10ಮಂಜೂಷದಲ್ಲಿ ಎರಡು ಕಲ್ಲಿನ ಹಲಗೆಗಳ ಹೊರತಾಗಿ ಬೇರೇನೂ ಇರಲಿಲ್ಲ, ಐಗುಪ್ತ ದೇಶದಿಂದ ಬಂದ ಇಸ್ರಾಯೇಲರೊಡನೆ, ಹೋರೇಬ್ ಬೆಟ್ಟದ ಬಳಿಯಲ್ಲಿ ಯೆಹೋವನು ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.11ಮಹಾ ಪರಿಶುದ್ಧ ಸ್ಥಳದಿಂದ ಯಾಜಕರು ಹೊರಗೆ ಬಂದರು. ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಮಾಡಿಕೊಂಡಿದ್ದರು.12ಹಾಗೂ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರೂ ಇವರ ಮಕ್ಕಳೂ, ಸಹೋದರರೂ ನಾರುಮಡಿಗಳನ್ನು ಧರಿಸಿಕೊಂಡು, ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನು ನುಡಿಸುತ್ತಾ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರೂ ತುತ್ತೂರಿಗಳನ್ನು ಊದುತ್ತಾ ಇದ್ದರು.13ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, <<ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು>> ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.14ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡಿದ್ದ ಮೇಘವು ದೇವಾಲಯದಲ್ಲಿ ತುಂಬಿಕೊಂಡಿದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.
6ಸೊಲೊಮೋನನ ಭಾಷಣ
1ತರುವಾಯ ಸೊಲೊಮೋನನು, ಯೆಹೋವನೇ <<ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ;2ಆದರೆ ನಾನು ನಿನಗೋಸ್ಕರ ಒಂದು ಆಲಯವನ್ನು, ನೀನು ಶಾಶ್ವತವಾಗಿ ವಾಸಮಾಡತಕ್ಕ ಸ್ಥಳವಾಗಿರಲೆಂದು ನಾನು ಕಟ್ಟಿಸಿದ್ದೇನೆ>> ಎಂದನು.3ಇದಾದ ಮೇಲೆ, ಅರಸನು ಎದ್ದು ನಿಂತು ಇಸ್ರಾಯೇಲಿನ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.4ಅವನು ಹೇಳಿದ್ದೇನೆಂದರೆ, <<ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ವಾಗ್ದಾನ ಮಾಡಿದಂತೆ ಈಗ ತನ್ನಿಂದ ನೆರವೇರಿಸುವಂತೆ ಮಾಡಿದ್ದಾನೆ.5ಆತನು ಹೇಳಿದ್ದೇನೆಂದರೆ, <ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.6ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ> ಎಂದು ಹೇಳಿದನು.7ಆದಕಾರಣ ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.8ಆಗ ಯೆಹೋವನು ನನ್ನ ತಂದೆಯಾದ ದಾವೀದನಿಗೆ, <ನೀನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.9ಆದರೆ ನೀನು ಆಲಯವನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸುವನು> ಎಂದು ಹೇಳಿದನು.10ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದ್ದಾನೆ. ಆತನು ವಾಗ್ದಾನ ಮಾಡಿದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲಿನ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಿದ್ದೇನೆ.11ಯೆಹೋವನಿಂದ ಇಸ್ರಾಯೇಲರಿಗೆ ದೊರಕಿದ ಒಡಂಬಡಿಕೆಯ ನಿಬಂಧನಾಶಾಸನಗಳಿರುವ ಮಂಜೂಷವನ್ನು ಅದರಲ್ಲಿ ಇಟ್ಟಿದ್ದೇನೆ>> ಎಂದು ಹೇಳಿದನು.ಸೊಲೊಮೋನನ ಪ್ರಾರ್ಥನೆ
12ಸೊಲೊಮೋನನು ಎಲ್ಲಾ ಇಸ್ರಾಯೇಲರ ಸಮ್ಮುಖದಲ್ಲಿ ಯೆಹೋವನ ಯಜ್ಞವೇದಿಯ ಎದುರು ತನ್ನ ಕೈಗಳನ್ನೆತ್ತಿ ಪ್ರಾರ್ಥನಾ ಭಂಗಿಯಲ್ಲಿ ನಿಂತನು.13ಸೊಲೊಮೋನನು ಐದು ಮೊಳ ಉದ್ದವೂ, ಐದು ಮೊಳ ಅಗಲವೂ, ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಯಜ್ಞವೇದಿಯನ್ನು ಮಾಡಿಸಿ ಅದನ್ನು ಅಂಗಳದ ಮಧ್ಯದಲ್ಲಿ ಇರಿಸಿದನು, ಆತನು ಅದರ ಮೇಲೆ ಮೊಣಕಾಲೂರಿ ನಿಂತನು. ಅವನು ಇಸ್ರಾಯೇಲರ ಸಮ್ಮುಖದಲ್ಲಿ ಆಕಾಶದ ಕಡೆಗೆ ತನ್ನ ಕೈಗಳನ್ನೆತ್ತಿ,14ಹೀಗೆ ಪ್ರಾರ್ಥಿಸಿದನು, <<ಇಸ್ರಾಯೇಲರ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರು ಯಾರೂ ಇಲ್ಲ; ಪೂರ್ಣಮನಸ್ಸಿನಿಂದ ನಿನಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನು ನೆರವೇರಿಸಿ ದಯೆಯನ್ನೂ, ಕೃಪೆಯನ್ನೂ ತೋರಿಸಬಲ್ಲ ದೇವರು ಒಬ್ಬರೂ ಇಲ್ಲ.15ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿದ್ದೀ; ನಿನ್ನ ಬಾಯಿ ನುಡಿದದ್ದನ್ನು ನಿನ್ನ ಕೈ ಈಹೊತ್ತು ನೆರವೇರಿಸಿದೆ.16ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ, <ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನಡೆದುಕೊಳ್ಳುವುದಾದರೆ ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂಬುದಾಗಿ ವಾಗ್ದಾನ ಮಾಡಿರುವೆಯಲ್ಲಾ, ಅದನ್ನು ನೆರವೇರಿಸು.>17ಈಗ ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದಿದ್ದೆಲ್ಲವೂ ಸ್ಥಿರವಾಗಿರಲಿ.18ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?19ಆದರೂ ನನ್ನ ದೇವರಾದ ಯೆಹೋವನೇ, ನಿನ್ನ ಈ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು; ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಈ ಸೇವಕನ ಮೊರೆಯನ್ನು ಲಾಲಿಸು.20ಈ ಸ್ಥಳವನ್ನು ಕುರಿತು, <ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು> >> ಎಂದು ಹೇಳಿದವನೇ, ನಿನ್ನ ಕೃಪಾ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗಲೆಲ್ಲಾ ಸದುತ್ತರವನ್ನು ದಯಪಾಲಿಸು.21ಇದಲ್ಲದೆ, ನೀನು ನಿನ್ನ ಸೇವಕನ ಹಾಗೂ ನಿನ್ನ ಪ್ರಜೆಗಳಾದ ಇಸ್ರಾಯೇಲರ ವಿಜ್ಞಾಪನೆಯನ್ನು ಲಾಲಿಸು. ಅವರು ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ವಿಜ್ಞಾಪನೆಯನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.22ನೆರೆಯವನಿಗೆ ವಿರೋಧವಾಗಿ ಪಾಪ ಮಾಡಿ, ಶಾಪಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣ ಮಾಡುವಾಗ, ಅವನು ಈ ಆಲಯಕ್ಕೆ ಬಂದು ನಿನ್ನ ಯಜ್ಞವೇದಿಯ ಮುಂದೆ ನಿಂತು ಪ್ರಮಾಣ ಮಾಡಿದರೆ,23ಆಗ ನೀನು ಪರಲೋಕದಿಂದ ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಮುಯ್ಯಿತೀರಿಸು; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡು.24<<ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನಗೆ ವಿರುದ್ಧವಾಗಿ ಪಾಪ ಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ಹಿಂದಿರುಗಿ ನಿನ್ನ ಆಲಯಕ್ಕೆ ಬಂದು ನಿನ್ನ ಹೆಸರನ್ನು ಸ್ತುತಿಸಿ, ನಿನ್ನ ಸನ್ನಿಧಿಯಲ್ಲಿ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನು ಮಾಡಿದರೆ,25ನೀನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷಮಿಸಿ, ಅವರಿಗೂ ಅವರ ಪೂರ್ವಿಕರಿಗೂ ನೀನು ಕೊಟ್ಟಿರುವ ಸ್ವದೇಶಕ್ಕೆ ಅವರನ್ನು ತಿರುಗಿ ಬರಮಾಡು.26<<ಅವರ ಪಾಪಗಳ ನಿಮಿತ್ತವಾಗಿ, ನೀನು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ತಗ್ಗಿಸಿದಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ತಿಳಿದುಕೊಂಡು ನಿನ್ನ ಹೆಸರನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ,27ಪರಲೋಕದಿಂದ ನೀನು ಲಾಲಿಸಿ ನಿನ್ನ ಸೇವಕರು ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗಳಿಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.28<<ದೇಶದಲ್ಲಿ ಬರಗಾಲ, ಘೋರವ್ಯಾಧಿ, ಬಿಸಿಗಾಳಿ, ಮಿಡತೆ, ಚಿಟ್ಟೇಹುಳು, ಹಸಿರುಹುಳು ಇಲ್ಲವೆ ಶತ್ರುಗಳು ಪಟ್ಟಣಕ್ಕೆ ಮುತ್ತಿಗೆ ಹಾಕುವುದು, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆಯುಂಟಾದರೆ,29ಎಲ್ಲಾ ಇಸ್ರಾಯೇಲ್ಯರಾಗಲಿ, ಅವರಲ್ಲೊಬ್ಬನಾಗಲಿ, ತಾವು ಅನುಭವಿಸುತ್ತಿರುವ ಉಪದ್ರವ ದುಃಖಗಳ ನಿಮಿತ್ತವಾಗಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡಿದರೆ,30ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅಲಿಸಿ ಅವರಿಗೆ ಪಾಪ ಕ್ಷಮೆಯನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡು.31ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಮಾರ್ಗಗಳಲ್ಲಿ ನಡೆಯುವರು.32<<ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದೆ ಸೇರದಂಥ ಒಬ್ಬ ಅನ್ಯನೂ, ಪರದೇಶಿಯು ನಿನ್ನ ಮಹತ್ತಾದ ನಾಮ, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವನ್ನು ಕೇಳಿ ದೂರದೇಶದಿಂದ ಬಂದು, ಈ ಆಲಯದ ಮುಂದೆ ನಿಂತು, ನಿನ್ನನ್ನು ಪ್ರಾರ್ಥಿಸಿದರೆ ನಿನ್ನ ನಿವಾಸವಾಗಿರುವ,33ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮದ ಮಹತ್ವವನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಹೆಸರಿನಲ್ಲಿ ಈ ಆಲಯವು ಕಟ್ಟಲ್ಪಟಿದ್ದೆಯೆಂದು ತಿಳಿದುಕೊಳ್ಳುವರು.34<<ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧ ಮಾಡುವುದಕ್ಕಾಗಿ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸಿದರೆ,35ನೀನು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ, ಕೇಳಿ ಅವರಿಗೆ ಸಹಾಯವನ್ನು ಮಾಡು.36<<ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು, ಪಾಪ ಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ, ಇರುವ ದೇಶಕ್ಕೆ ಒಯ್ದಾಗ,37ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು, <ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು> ಎಂದು ವಿಜ್ಞಾಪನೆ ಮಾಡಿ,38ನಿನ್ನ ಕಡೆಗೆ ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ತಿರುಗಿ, ನೀನು ಅವರ ಪೂರ್ವಿಕರಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿರುವ ಈ ಆಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥನೆಯನ್ನು ಮಾಡಿದರೆ,39ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು, ವಿಜ್ಞಾಪನೆಯನ್ನು ಆಲಿಸಿ, ಅವರಿಗೆ ನ್ಯಾಯವನ್ನು ಪಾಲಿಸಿ ನಿನಗೆ ವಿರುದ್ಧವಾಗಿ ಪಾಪಮಾಡಿದ ನಿನ್ನ ಪ್ರಜೆಗಳಿಗೆ ಕ್ಷಮೆಯನ್ನು ಅನುಗ್ರಹಿಸು.40ನನ್ನ ದೇವರೇ, ಕಟಾಕ್ಷವಿಟ್ಟು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡು.41ದೇವರಾದ ಯೆಹೋವನೇ, ನೀನು ನಿನ್ನ ಪ್ರತಾಪವಾದ ಮಂಜೂಷದ ಸಂಗಡ, ನಿನ್ನ ವಾಸಸ್ಥಾನದೊಳಗೆ ಬರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.42ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ.>> ಎಂದು ವಿಜ್ಞಾಪನೆ ಮಾಡಿಕೊಂಡನು.
7ದೇವಾಲಯದ ಪ್ರತಿಷ್ಠಾಪನೆ
1ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.2ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.3ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, <<ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು>> ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.4ಅರಸನೂ ಮತ್ತು ಎಲ್ಲಾ ಜನರೂ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನು ಅರ್ಪಿಸಿದರು.5ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.6ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, <<ಆತನ ಕೃಪೆಯು ಶಾಶ್ವತವಾದದ್ದು>> ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.7ಸೊಲೊಮೋನನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠೆ ಮಾಡಿದನು. ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನೂ, ಸಮಾಧಾನ ಯಜ್ಞದ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ಸರ್ವಾಂಗಹೋಮವನ್ನೂ, ಧಾನ್ಯನೈವೇದ್ಯಗಳನ್ನೂ, ಸಮಾಧಾನ ಯಜ್ಞದ ಕೊಬ್ಬಿನ ಕಾಣಿಕೆಯನ್ನು ಸಮರ್ಪಿಸಿದನು.8ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ, ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಅಲ್ಲಿ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆ ಆಚರಿಸಿದರು.9ತರುವಾಯ ಎಂಟನೆಯ ದಿನದಲ್ಲಿ ಪರಿಶುದ್ಧ ಸಭೆ ನಡಿಸಿದರು. ಹೀಗೆ ಏಳು ದಿನ ಯಜ್ಞವೇದಿಯ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿನ ಜಾತ್ರೆಯ ಹಬ್ಬವನ್ನು ಆಚರಿಸಿದರು.10ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.ಯೆಹೋವನು ಪುನಃ ಸೊಲೊಮೋನನಿಗೆ ಪ್ರತ್ಯಕ್ಷನಾದದ್ದು
11ಸೊಲೊಮೋನನು ಯೆಹೋವನ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಹೃದಯದಲ್ಲಿದ್ದ ಎಲ್ಲವನ್ನೂ ಅರಸನು ಈಡೇರಿಸಿದನು.12ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, <<ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ.13ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ,14ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.15ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.16ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.17ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವುದಾದರೆ,18ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಅಲ್ಲದೆ ಇಸ್ರಾಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ಸದಾಕಾಲ ರಾಜ್ಯಾಭಾರ ನಡಿಸುವರು ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.19ಆದರೆ ನೀವು ದ್ರೋಹಿಗಳಾಗಿ ಯೆಹೋವನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಆರಾಧಿಸಿ,20ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.21ಉನ್ನತವಾದ ಮಂದಿರದ ಈ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ಬೆರಗಾಗಿ, <ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು?> ಎಂದು ಕೇಳುವರು.22ಆಗ ಅವರಿಗೆ, <ಈ ದೇಶದವರು ತಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿ, ಅನ್ಯ ದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ.> >> ಎಂದು ಉತ್ತರ ಕೊಡುವರು ಎಂದನು.
8ಸೊಲೊಮೋನನ ಇತರ ಸಾಧನೆಗಳು
1ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.2ಸೊಲೊಮೋನನು ಹೂರಾಮನಿಂದ ತನಗೆ ದೊರಕಿದ ಪಟ್ಟಣವನ್ನು ಪುನಃ ಕಟ್ಟಿಸಿ ಅವುಗಳಲ್ಲಿ ಇಸ್ರಾಯೇಲರು ವಾಸಿಸುವಂತೆ ಮಾಡಿದನು.3ಅನಂತರ ಸೊಲೊಮೋನನು ಚೋಬ ರಾಜ್ಯದ ಹಮಾತಿಗೆ ಬಂದು ಅದನ್ನು ಸ್ವಾಧೀನಮಾಡಿಕೊಂಡನು.4ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ್ದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಭದ್ರಪಡಿಸಿದನು.5ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಪಟ್ಟಣಗಳಿಗೆ ಪೌಳಿಗೋಡೆ, ಬಾಗಿಲು, ಅಗುಳಿ ಇವುಗಳನ್ನು ಸಿದ್ಧಪಡಿಸಿ ಕೋಟೆಗಳನ್ನಾಗಿ ಮಾಡಿಕೊಂಡನು.6ಬಾಲಾತೊರು ಮತ್ತು ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣಗಳನ್ನೂ, ರಾಹುತರ ಪಟ್ಟಣಗಳನ್ನೂ ಸೊಲೊಮೋನನು ಕಟ್ಟಿಸಿದನು. ಅಲ್ಲದೆ ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.7ಇದಲ್ಲದೆ ಇಸ್ರಾಯೇಲರಿಂದ ಸಂಹೃತರಾಗದೆ, ಕಾನಾನ್ ದೇಶದಲ್ಲಿ ಉಳಿದಿದ್ದ ಹಿತ್ತಿಯ, ಅಮೋರಿಯ, ಪೆರಿಜೀಯ, ಹಿವ್ವಿಯ, ಯೆಬೂಸಿಯ,8ಮೊದಲಾದ ಅನ್ಯ ಜನಾಂಗಗಳನ್ನು, ಇಸ್ರಾಯೇಲ್ಯರು ನಾಶಮಾಡದೆ ಉಳಿಸಿದ ಸಂತಾನದವರೆಲ್ಲರನ್ನೂ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ನೇಮಿಸಿದನು. ಅವರು ಇಂದಿನವರೆಗೂ ಬಿಟ್ಟಿ ಕೆಲಸ ಮಾಡುವವರಾಗಿದ್ದಾರೆ.9ಆದರೆ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ಇಸ್ರಾಯೇಲರನ್ನು ನೇಮಕ ಮಾಡಿಕೊಳ್ಳಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.10ಈ ಇನ್ನೂರೈವತ್ತು ಮಂದಿ ಅರಸನಾದ ಸೊಲೊಮೋನನ ಮುಖ್ಯಾಧಿಕಾರಿಗಳೂ, ಪ್ರಜೆಗಳ ಮೇಲ್ವಿಚಾರಕರೂ ಆಗಿದ್ದರು.11ಸೊಲೊಮೋನನು, <<ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವೆಲ್ಲವೂ ಪವಿತ್ರಸ್ಥಾನಗಳು. ಆದುದರಿಂದ ಇಸ್ರಾಯೇಲರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಪುತ್ರಿಯಾದ ನನ್ನ ಹೆಂಡತಿಯು ವಾಸಿಸಬಾರದು>> ಅಂದುಕೊಂಡು ಆಕೆಯನ್ನು ದಾವೀದನಗರದಲ್ಲಿರಿಸದೆ, ತಾನು ಆಕೆಗಾಗಿ ಕಟ್ಟಿಸಿದ ಮಂದಿರಕ್ಕೆ ಕರೆದುಕೊಂಡು ಬಂದನು.12ಆ ಕಾಲದಿಂದ ಸೊಲೊಮೋನನು, ತಾನು ಮಂಟಪದ ಮುಂದೆ ಕಟ್ಟಿಸಿದ ಯೆಹೋವನ ಯಜ್ಞವೇದಿಯ ಮೇಲೆ,13ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.14ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.15ರಾಜನು ಯಾಜಕರನ್ನೂ, ಲೇವಿಯರನ್ನೂ, ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ.16ಈ ಪ್ರಕಾರ ಆಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸ ಕಾರ್ಯಗಳೂ ಮುಗಿದು ಯೆಹೋವನ ಆಲಯವು ಪೂರ್ಣಗೊಂಡಿತ್ತು.17ಆನಂತರ, ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು.18ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡುಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನು ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ಬಂಗಾರವನ್ನು ತಂದುಕೊಟ್ಟರು.
9ಶೆಬಾ ದೇಶದ ರಾಣಿಯು ಸೊಲೊಮೋನನ ಭೇಟಿಯಾದದ್ದು
1ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.2ಸೊಲೊಮೋನನು ಆಕೆಯ ಪ್ರಶ್ನೆಗಳಿಗೂ ಉತ್ತರಕೊಟ್ಟನು; ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದ್ದರಿಂದ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು.3ಶೆಬಾದ ರಾಣಿಯು, ಸೊಲೊಮೋನನ ಜ್ಞಾನ, ಅವನು ಕಟ್ಟಿಸಿದ ಅರಮನೆ,4ಭೋಜನ ಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೂ, ಅರಸನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗ ಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ5ಅವನಿಗೆ, <<ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.6ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವವರೆಗೆ ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ; ಈಗ ನೋಡಿದರೆ, ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಉನ್ನತವಾಗಿದೆ; ಜನರು ನಿನ್ನ ಜ್ಞಾನ ಮತ್ತು ಐಶ್ವರ್ಯದ ಬಗ್ಗೆ ಅರ್ಧವನ್ನಾದರೂ ನನಗೆ ಹೇಳಿರಲಿಲ್ಲ.7ನಿನ್ನ ಪ್ರಜೆಗಳೂ, ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.8ನಿನ್ನನ್ನು ಮೆಚ್ಚಿ, ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನ್ನಾಗಿ ನೇಮಿಸಿದ್ದಾನೆ>> ಎಂದು ಹೇಳಿದಳು.9ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧ ದ್ರವ್ಯವನ್ನೂ, ಅಮೂಲ್ಯರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದ ಸುಗಂಧದ್ರವ್ಯ ಮತ್ತೆ ಸಿಗಲೇ ಇಲ್ಲ.10ಹೂರಾಮನ ಮತ್ತು ಸೊಲೊಮೋನನ ಆಳುಗಳು ಓಫೀರ್ ದೇಶದ ಬಂಗಾರವನ್ನಲ್ಲದೆ ಸುಗಂಧದ ಮರಗಳ ಅಮೂಲ್ಯರತ್ನಗಳನ್ನೂ ತಂದರು.11ಅರಸನು ಸುಗಂಧದ ಮರದಿಂದ ಯೆಹೋವನ ದೇವಾಲಯವನ್ನು ಹಾಗೂ ಅರಮನೆಗಳಿಗೆ ಸೋಪಾನಗಳನ್ನೂ, ಸಂಗೀತಗಾರರಿಗಾಗಿ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ ಗಂಧದ ಮರವು ಹಿಂದೆಂದೂ ಯೆಹೂದ ದೇಶದಲ್ಲಿ ಕಂಡಿರಲಿಲ್ಲ.12ಅರಸನಾದ ಸೊಲೊಮೋನನು ಶೆಬಾದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ, ಆಕೆಗೆ ತಾನು ಕೊಟ್ಟು ವಸ್ತುಗಳನ್ನಲ್ಲದೆ, ಆಕೆಯು ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.ಸೊಲೊಮೋನನ ವೈಭವ
13ಸೊಲೊಮೋನನಿಗೆ ಪ್ರತಿ ವರ್ಷ ಆರು ನೂರಅರವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು.14ಇದಲ್ಲದೆ ದೇಶಾಂತರದಲ್ಲಿ ವ್ಯಾಪಾರಮಾಡುತ್ತಿದ್ದ ವ್ಯಾಪಾರಿಗಳೂ, ವರ್ತಕರೂ, ಅರಬಸ್ಥಾನದ ಅರಸರೂ, ದೇಶಾಧಿಪತಿಗಳೂ ಅರಸನಾದ ಸೊಲೊಮೋನನಿಗೆ ಬೆಳ್ಳಿ ಮತ್ತು ಬಂಗಾರವನ್ನು ತರುತ್ತಿದ್ದರು.15ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರವು ಹಿಡಿಸುತ್ತಿತ್ತು.16ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು; ಪ್ರತಿಯೊಂದು ಖೇಡ್ಯಕ್ಕೆ ಮುನ್ನೂರು ತೊಲಾ ಬಂಗಾರ ಬೇಕಾಗುತ್ತಿತ್ತು. ಅರಸನು ಇವುಗಳನ್ನು ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿರಿಸಿದನು.17ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.18ಅದಕ್ಕೆ ಹೊಂದಿಕೆಯಾದ ಆರು ಮೆಟ್ಟಲುಗಳೂ, ಬಂಗಾರದ ಸಿಂಹಾಸನವೂ, ಒಂದು ಪಾದಪೀಠವು ಇದ್ದವು; ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.19ಆರು ಮೆಟ್ಟಿಲುಗಳ ಎರಡು ಕಡೆಗಳಲ್ಲಿಯೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.20ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳಾಗಿದ್ದವು. ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಎಲ್ಲಾ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.21ಅರಸನ ಹಡುಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರ, ನವಿಲು ಇವುಗಳನ್ನು ತರುತ್ತಿದ್ದವು.22ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.23ಭೂರಾಜರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಸೊಲೊಮೋನ ದರ್ಶನಕ್ಕೆ ಬರುತ್ತಿದ್ದರು.24ಅವರೆಲ್ಲರೂ ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಸಲಕರಣಿಗಳು, ಶಸ್ತಾಸ್ತ್ರಗಳು, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.25ಸೊಲೊಮೋನನು ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು.26ಅವನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜರನ್ನು ಆಳುತ್ತಿದ್ದನು.27ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯು ಕಲ್ಲಿನ ಹಾಗೆಯೂ, ದೇವದಾರು ಮರಗಳು ಇಳಿಜಾರು ಪ್ರದೇಶದಲ್ಲಿ ಬೆಳೆಯುವ ಅತ್ತಿ ಮರಗಳಂತೆ ಹೇರಳವಾಗಿದ್ದವು.28ಸೊಲೊಮೋನನಿಗೋಸ್ಕರ ಐಗುಪ್ತ್ಯದಿಂದಲೂ ಹಾಗೂ ಬೇರೆ ದೇಶಗಳಿಂದಲೂ ಕುದುರೆಗಳನ್ನು ತರುತ್ತಿದ್ದರು.ಸೊಲೊಮೋನನ ಮರಣ
29ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆಯ ಗ್ರಂಥ, ಹಾಗೂ ದಿವ್ಯದಾರ್ಶಿಕನಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.30ಸೊಲೊಮೋನನು ಯೆರೂಸಲೇಮಿನಲ್ಲಿ ಇದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದನು.31ಆನಂತರ ಸೊಲೊಮೋನನು ತನ್ನ ಪೂರ್ವಿಕರ ಬಳಿಗೆ ಸೇರಿದನು, ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.
10ಇಸ್ರಾಯೇಲರು ರೆಹಬ್ಬಾಮನ ವಿರೋಧವಾಗಿ ದಂಗೆ ಎದ್ದದ್ದು
1ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.2ಇದಲ್ಲದೆ ಅರಸನಾದ ಸೊಲೊಮೋನನಿಂದ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿ ಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿದೊಡನೆ ಐಗುಪ್ತದಿಂದ ಹಿಂತಿರುಗಿ ಬಂದಿದ್ದನು.3ಇಸ್ರಾಯೇಲರು ಅವನನ್ನೂ ತಮ್ಮ ಬಳಿಗೆ ಕರೆಸಿಕೊಂಡರು. ಯಾರೊಬ್ಬಾಮನು ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,4ಅವನಿಗೆ, <<ನಿನ್ನ ತಂದೆಯು ನಮ್ಮ ಮೇಲೆ ಹೊರೆಯನ್ನು ಹೊರಿಸಿದ್ದನು; ನಿನ್ನ ತಂದೆಯು ನೇಮಿಸಿದ ಬಿಟ್ಟಿ ಕೆಲಸವನ್ನು ನೀನು ಕಡಿಮೆ ಮಾಡಿ, ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ, ನಾವು ನಿನ್ನನ್ನು ಸೇವಿಸುವೆವು>> ಎಂದು ಹೇಳಿದರು.5ಅದಕ್ಕೆ ರೆಹಬ್ಬಾಮನು, <<ನೀವು ಮೂರು ದಿನಗಳ ಬಳಿಕ ಬನ್ನಿರಿ>> ಎಂದು ಉತ್ತರಕೊಟ್ಟನು; ಜನರು ಹೊರಟು ಹೋದರು.6ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಸಿ ಅವರಿಗೆ, <<ಈ ಜನರಿಗೆ ಉತ್ತರ ಕೊಡಲು ನೀವು ಯಾವ ಆಲೋಚನೆಯನ್ನು ನನಗೆ ಹೇಳುವಿರಿ?>> ಎಂದನು.7ಅವರು ಅವನಿಗೆ, <<ನೀನು ಈ ಜನರಿಗೆ ದಯತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರ ಕೊಟ್ಟರೆ ಅವರು ಯಾವಾಗಲೂ ನಿನಗೆ ಅಧೀನರಾಗಿರುವರು>> ಎಂದರು.8ಆದರೆ ಅವನು ಅ ಹಿರಿಯರ ಆಲೋಚನೆಯನ್ನು ನಿರಾಕರಿಸಿ, ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿದನು.9<<ನನ್ನ ತಂದೆಯು ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?>> ಎಂದು ಕೇಳಿದನು.10ಅವರು ಅವನಿಗೆ, <<ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರ ಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡಿರುವ ಈ ಜನರಿಗೆ ನೀನು, <ನನ್ನ ತಂದೆಯ ನಡುವಿಗಿಂತ ನನ್ನ ಕಿರುಬೆರಳು ದಪ್ಪವಾಗಿದೆ.11ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು> ಎಂಬುದಾಗಿ ಹೇಳಬೇಕು>> ಎಂದು ಉತ್ತರಕೊಟ್ಟರು.12ಯಾರೊಬ್ಬಾಮನೂ ಮತ್ತು ಜನರೆಲ್ಲರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನ ಹಿಂತಿರುಗಿ ಅವನ ಬಳಿಗೆ ಬಂದರು.13ಅರಸನಾದ ರೆಹಬ್ಬಾಮನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.14ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, <<ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನೂ ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು>> ಎಂದು ನುಡಿದನು.15ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರಿತು.16ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ತಿಳಿದು; ಇಸ್ರಾಯೇಲರೆಲ್ಲರು ಅವನಿಗೆ, <<ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ. ಇಷಯನ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಸ್ವತ್ತುಗಳಿಗೆ ಹೋಗಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ>> ಎಂದು ಹೇಳಿ ತಮ್ಮ ತಮ್ಮ ಗುಡಾರಗಳಿಗೆ ಹಿಂತಿರುಗಿದರು.17ಯೆಹೂದ ಪಟ್ಟಣದಲ್ಲಿದ್ದ ಇಸ್ರಾಯೇಲರಾದರೋ ಅರಸನಾದ ರೆಹಬ್ಬಾಮನ ಅಧೀನದಲ್ಲಿದ್ದರು.18ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಹದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದಾಗ, ಅವರು ಅವನನ್ನು ಕಲ್ಲೆಸೆದು ಕೊಂದರು. ಆಗ ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿ ಹೋದನು.19ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.
111ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೂ, ರಾಜ್ಯವನ್ನು ತಿರುಗಿ ತನ್ನ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.2ಆಗ ದೇವರ ಮನುಷ್ಯನಾದ ಶೆಮಾಯನಿಗೆ, ಯೆಹೋವನ ವಾಕ್ಯವು ಉಂಟಾಗಿ ಹೇಳಿದ್ದೇನಂದರೆ,3<<ನೀನು ಹೋಗಿ ಸೊಲೊಮೋನನ ಮಗನೂ, ಯೆಹೂದದ ಅರಸನಾದ ರೆಹಬ್ಬಾಮನಿಗೂ ಯೆಹೂದದ ಬೆನ್ಯಾಮೀನ್ ಕುಲಗಳ ಇಸ್ರಾಯೇಲರೆಲ್ಲರಿಗೂ,4ಯೆಹೋವನು ಇಂತೆನ್ನುತ್ತಾನೆ, <ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು> >> ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಡದೆ ಹಿಂತಿರುಗಿ ಹೋದರು.ಅರಸನಾದ ರೆಹಬ್ಬಾಮನು
5ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸವಾಗಿದ್ದು ಯೆಹೂದ ಸಂರಕ್ಷಣೆಗಾಗಿ ಪಟ್ಟಣಗಳನ್ನು ಕಟ್ಟಿಸಿದನು.6ಆ ಪಟ್ಟಣಗಳು ಯಾವುವೆಂದರೆ: ಬೇತ್ಲೆಹೇಮ್, ಏತಾಮ್, ತೆಕೋವ,7ಬೇತ್ಚೂರ್, ಸೋಕೋ, ಅದುಲ್ಲಾಮ್,8ಗತ್ ಊರು, ಮಾರೇಷ, ಜೀಫ್9ಅದೋರೈಮ್, ಲಾಕೀಷ್, ಅಜೇಕ,10ಚೊರ್ಗ, ಅಯ್ಯಾಲೋನ್, ಹೆಬ್ರೋನ್. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಾಗಿದ್ದವು.11ಅವನು ಈ ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸವನ್ನು ಸಂಗ್ರಹಿಸಿಟ್ಟನು. ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿಟ್ಟನು.12ಪ್ರತಿಯೊಂದು ಪಟ್ಟಣದಲ್ಲಿ ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿ, ಅವುಗಳನ್ನು ಮತ್ತಷ್ಟು ಭದ್ರಪಡಿಸಿದನು. ಯೆಹೂದ ಬೆನ್ಯಾಮೀನ್ ಕುಲಗಳು ಅವನ ಸ್ವಾಧೀನದಲ್ಲಿದ್ದವು.13ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರೂ ಮತ್ತು ಲೇವಿಯರೂ ಅವನೊಡನೆ ಬಂದು ಸೇರಿಕೊಂಡರು.14ಲೇವಿಯರು ಯೆಹೋವನಿಗೆ ಯಾಜಕ ಸೇವೆ ಮಾಡದಂತೆ ಯಾರೊಬ್ಬಾಮನೂ ಮತ್ತು ಅವನ ಮಕ್ಕಳೂ ಅವರನ್ನು ಬಹಿಷ್ಕರಿಸಿದ್ದರಿಂದ ಲೇವಿಯರು ತಮ್ಮ ಹುಲ್ಲುಗಾವಲುಗಳಿದ್ದ ತಮ್ಮ ಆಸ್ತಿಗಳನ್ನು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.15ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು.16ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.17ಇವರೆಲ್ಲರೂ ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗು ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಅಂತೆಯೇ ಯೆಹೂದ ರಾಜ್ಯವು ಆ ವರ್ಷಗಳಲ್ಲಿ ಅಭಿವೃದ್ಧಿಯಾಗಿ, ಸೊಲೊಮೋನನ ಮಗನಾದ ರೆಹಬ್ಬಾಮನು ಬಲಗೊಂಡನು.ರೆಹಬ್ಬಾಮನ ಕುಟುಂಬ
18ರೆಹಬ್ಬಾಮನು ದಾವೀದನ ಮಗನಾದ ಯೆರೀಮೋತನ ಮಗಳಾದ ಮಹ್ಲತ್ತಳನ್ನು, ಇಷಯನ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀಹೈಲಳನ್ನೂ ಹೆಂಡತಿಯನ್ನಾಗಿ ಮಾಡಿಕೊಂಡನು.19ಆಕೆಯು ಅವನಿಂದ ಯೆಗೂಷ್, ಶೆಮರ್ಯ, ಜಾಹಮ್ ಎಂಬ ಗಂಡು ಮಕ್ಕಳನ್ನು ಹೆತ್ತಳು.20ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆಮಾಡಿಕೊಂಡನು; ಆಕೆಯು ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು.21ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ, ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ, ಅರುವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುವತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು.22ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣ ತಮ್ಮಂದಿರಲ್ಲಿ ಪ್ರಧಾನನ್ನಾಗಿಯೂ ಪ್ರಭುವನ್ನಾಗಿಯೂ ನೇಮಿಸಿದನು.23ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ, ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿರಿಸಿ, ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ, ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು.
12ಯೆಹೂದದ ಮೇಲೆ ಐಗುಪ್ತರ ದಾಳಿ
1ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು.2ಅವರು ಯೆಹೋವನಿಗೆ ದ್ರೋಹಮಾಡಿದ್ದರಿಂದ ಅರಸನಾದ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಐಗುಪ್ತದ ಅರಸನಾದ ಶೀಶಕನು, ಸೈನಿಕರನ್ನು ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟನು.3ಸಾವಿರದ ಇನ್ನೂರು ರಥಗಳನ್ನೂ, ಅರುವತ್ತು ಸಾವಿರ ಮಂದಿ ರಾಹುತರನ್ನೂ, ಐಗುಪ್ತದಿಂದ ಅಸಂಖ್ಯರಾದ ಲೂಬ್ಯ, ಸುಕ್ಕೀಯ, ಕೂಷ್ಯ ಸೈನಿಕರನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟು,4ಯೆಹೂದ ದೇಶದ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಯೆರೂಸಲೇಮನ್ನು ಸಮೀಪಿಸಿದನು.5ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, <<ಯೆಹೋವನು ಹೀಗೆನ್ನುತ್ತಾನೆ, <ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ> >> ಎಂದು ಹೇಳಿದನು.6ಆಗ ಅರಸನೂ ಮತ್ತು ಇಸ್ರಾಯೇಲರ ನಾಯಕರೂ ಯೆಹೋವನು ನೀತಿವಂತನೆಂದು ಒಪ್ಪಿ ತಮ್ಮನ್ನು ತಾವೇ ತಗ್ಗಿಸಿಕೊಂಡರು.7ಯೆಹೋವನ ವಾಕ್ಯವು ಶೆಮಾಯನಿಗೆ, <<ಇವರು ತಮ್ಮನ್ನು ತಗ್ಗಿಸಿಕೊಂಡಿದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪ ಕಾಲದಲ್ಲಿಯೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರವಾಗಿ ನನ್ನ ರೌದ್ರವನ್ನು ಯೆರೂಸಲೇಮಿನ ಮೇಲೆ ಸುರಿದು ಬಿಡುವುದಿಲ್ಲ.8ಆದರೂ ಅವರು ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸವು ಗೊತ್ತಾಗುವಂತೆ ಇವರು ಶೀಶಕನಿಗೆ ದಾಸರಾಗಬೇಕು>> ಎಂದು ಹೇಳಿದನು.9ಹೀಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು ಐಗುಪ್ತ್ಯ ರಾಜನಾದ ಶೀಶಕನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.10ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳಪತಿಗೆ ಒಪ್ಪಿಸಿದನು.11ಅರಸನು ಯೆಹೋವನ ಅಲಯಕ್ಕೆ ಹೋಗುವಾಗಲೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುವರು; ಅಲ್ಲಿಂದ ಹಿಂತಿರುಗಿ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಗಳಲ್ಲಿಡುವರು.12ರೆಹಬ್ಬಾಮನು ತನ್ನನ್ನು ತಗ್ಗಿಸಿ ಕೊಂಡದ್ದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರಿ ಬಂದಿದ್ದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.13ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ವತ್ತೊಂದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.14ಅವನು ಯೆಹೋವನನ್ನು ಅನುಸರಿಸುವುದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು.15ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಕನಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.16ರೆಹಬ್ಬಾಮನು ತನ್ನ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಲಾಯಿತು. ಅವನ ಮಗನಾದ ಅಬೀಯನು ಅವನ ನಂತರ ಅರಸನಾದನು.
13ಯೆಹೂದದ ಅರಸನಾದ ಅಬೀಯನು
1ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,2ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಅಬೀಯನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.3ಅಬೀಯನು ನಾಲ್ಕು ಲಕ್ಷ ಮಂದಿ ಯುದ್ಧವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರುದ್ಧವಾಗಿ ಬಂದು ವ್ಯೂಹಕಟ್ಟಿದನು.4ಆಗ ಅಬೀಯನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಚೆಮಾರೈ ಎಂಬ ಬೆಟ್ಟದಲ್ಲಿ ನಿಂತು, <<ಯಾರೊಬ್ಬಾಮನೇ, ಎಲ್ಲಾ ಇಸ್ರಾಯೇಲರೇ, ನನ್ನ ಮಾತನ್ನು ಕೇಳಿರಿ.5ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?6ಹೀಗಿದ್ದರೂ ದಾವೀದನ ಮಗನಾದ ಸೊಲೊಮೋನನ ಸೇವೆಯಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಎದ್ದು ತನ್ನ ದಣಿಗೆ ವಿರುದ್ಧವಾಗಿ ತಿರುಗಿ ಬಿದ್ದನು.7ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡರು. ಆ ಸಮಯದಲ್ಲಿ ಎಳೇಪ್ರಾಯದವನೂ, ಮೃದುಸ್ವಭಾವವುಳ್ಳವನೂ, ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.8ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?9ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ, ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.10ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.11ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.12ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ>> ಎಂದು ಕೂಗಿ ಹೇಳಿದನು.13ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚು ಹಾಕುವುದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವರು ಅವರ ಹಿಂದೆಯೂ ಇದ್ದರು.14ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು.15ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ಯೆಹೋವನಾದ ದೇವರು ಯಾರೊಬ್ಬಾಮನನ್ನೂ, ಎಲ್ಲಾ ಇಸ್ರಾಯೇಲರನ್ನೂ ಅಬೀಯನಿಂದಲೂ ಹಾಗೂ ಯೆಹೂದ್ಯರಿಂದಲೂ ಅಪಜಯಗೊಳಿಸಿದನು.16ಹೀಗಾಗಿ ಇಸ್ರಾಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ಯೆಹೋವನಾದ ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದನು.17ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.18ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು.19ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.20ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಬಾಧಿಸಿದ್ದರಿಂದ ಅವನು ಸತ್ತನು.21ಅಬೀಯನು ಬಲಗೊಂಡನು; ಅವನು ಹದಿನಾಲ್ಕು ಮಂದಿ ಹೆಂಡತಿಯರಿಂದ ಇಪ್ಪತ್ತೆರಡು ಮಂದಿ ಗಂಡುಮಕ್ಕಳನ್ನೂ ಹದಿನಾರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು.22ಅಬೀಯನ ಉಳಿದ ಚರಿತ್ರೆಯೂ ಅವನ ನಡೆನುಡಿಗಳೂ ಪ್ರವಾದಿಯಾದ ಇದ್ದೋವಿನ ಚರಿತ್ರೆ ಪುಸ್ತಕದಲ್ಲಿ ಬರೆದಿರುತ್ತವೆ.
14ಯೆಹೂದದ ಅರಸನಾದ ಆಸ
1ಅಬೀಯನು ಮೃತನಾಗಿ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದ ಹತ್ತು ವರ್ಷ ದೇಶದಾದ್ಯಂತ ಸಮಾಧಾನವಿತ್ತು.2ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.3ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡೆದು ಹಾಕಿ, ಅಶೇರ ವಿಗ್ರಹ ಸ್ತಂಭಗಳನ್ನು ಕೆಡವಿ ಬಿಟ್ಟನು.4ಯೆಹೂದ್ಯರಿಗೆ, <<ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರದ ವಿಧಿಗಳನ್ನು ಕೈಕೊಳ್ಳಿರಿ>> ಎಂದು ಆಜ್ಞಾಪಿಸಿದನು.5ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.6ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದುದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.7ಇವನು ಯೆಹೂದ್ಯರಿಗೆ, <<ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ, ಅವುಗಳನ್ನು ಸುತ್ತಣ ಗೋಡೆ, ಗೋಪುರ, ಬುರುಜು ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ>> ಎನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.8ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯ ಸೈನಿಕರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ ಸೈನಿಕರೂ ಇದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು.9ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷದವರೆಗೆ ಬಂದನು.10ಆಸನು ಅವನಿಗೆ ವಿರುದ್ಧವಾಗಿ ಹೊರಟನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬಯಲಿನಲ್ಲಿ ಇಬ್ಬರೂ ವ್ಯೂಹಕಟ್ಟಿದರು.11ಆಸನು ತನ್ನ ದೇವರಾದ ಯೆಹೋವನಿಗೆ, <<ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು>> ಎಂದು ಮೊರೆಯಿಡಲು.12ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯ ಉಂಟಾಗುವಂತೆ ಮಾಡಿದನು.13ಕೂಷ್ಯರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ನುಚ್ಚು ನೂರಾಗಿ ಹೋದರು. ಇಸ್ರಾಯೇಲರಿಗೆ ಅಪರಿಮಿತವಾದ ಕೊಳ್ಳೆ ಸಿಕ್ಕಿತು.14ಇದಲ್ಲದೆ ಯೆಹೋವನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಿಂದ ಅವರಿಗೆ ದೊಡ್ಡ ಕೊಳ್ಳೆ ಸಿಕ್ಕಿತು.15ದನ ಕಾಯುವವರ ಗುಡಾರಗಳ ಮೇಲೂ ದಾಳಿಮಾಡಿ ಸಾಕಷ್ಟು ಒಂಟೆ ಕುರಿಗಳನ್ನು ಯೆರೂಸಲೇಮಿಗೆ ಹೊಡೆದುಕೊಂಡು ಬಂದರು.
15ಆಸನಿಂದ ಧಾರ್ಮಿಕ ಸುಧಾರಣೆ
1ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.2ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, <<ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.3ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.4ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.5ಆ ಕಾಲದಲ್ಲಿ ಯಾರಿಗೂ ಸಮಾಧಾನವಾಗಿ ತಿರುಗಾಡುವುದಕ್ಕೆ ಸಾಧ್ಯವಾಗುತ್ತಾ ಇರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.6ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ, ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು.7ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು>> ಎಂದು ಹೇಳಿದನು.8ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.9ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು.10ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು.11ಯೆಹೋವನಿಗಾಗಿ ಆ ದಿನ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯಜ್ಞಮಾಡಿದರು.12ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.13ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು14ತುತ್ತೂರಿ ಕೊಂಬುಗಳನ್ನೂ ಊದಿಸಿ ದೊಡ್ಡ ಅರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು.15ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.16ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು.17ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.18ತನ್ನ ತಂದೆಯೂ ತಾನೂ ದೇವರಿಗೆ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ, ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.19ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿರಲಿಲ್ಲ.
16ಅರಸನಾದ ಆಸನ ಅಂತ್ಯ
1ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಕೋಟೆಯನ್ನು ಭದ್ರಪಡಿಸಿದನು.2ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ3ಅವನಿಗೆ, <<ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಪ್ಪಂದ ಇದೆಯಲ್ಲಾ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ: ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು>> ಎಂದು ಹೇಳಿ ಕಳುಹಿಸಿದನು.4ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರುದ್ಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್, ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.5ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.6ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮ ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.7ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, <<ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.8ಕೂಷ್ಯ ಹಾಗೂ ಲೂಬ್ಯರ ಸೈನ್ಯವು ಅಪರಿಮಿತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೇ? ನೀನು ಯೆಹೋವನನ್ನು ಆಶ್ರಯಿಸಿಕೊಂಡದ್ದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.9ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ>> ಎಂದು ಹೇಳಿದನು.10ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.11ಆಸನ ಪೂರ್ವೋತ್ತರಚರಿತ್ರೆಗಳನ್ನು ಯೆಹೂದ ಮತ್ತು ಇಸ್ರಾಯೇಲ್ ರಾಜರ ಇತಿಹಾಸ ಗ್ರಂಥಗಳಲ್ಲಿ ಬರೆದಿರುತ್ತದೆ.12ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.13ಆಸನು ತನ್ನ ಆಳ್ವಿಕೆಯ ನಲ್ವತ್ತೊಂದನೆಯ ವರ್ಷದಲ್ಲಿ ತೀರಿಕೊಂಡು ಪೂರ್ವಿಕರ ಬಳಿಗೆ ಸೇರಿದನು.14ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.
17ಯೆಹೂದದ ಅರಸನಾದ ಯೆಹೋಷಾಫಾಟನು
1ಆಸನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು. ಅವನು ಇಸ್ರಾಯೇಲರೆದುರು ಪ್ರಬಲನಾಗಿದ್ದನು.2ಅವನು ಯೆಹೂದದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ರ ಪಟ್ಟಣಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿದನು.3ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು.4ಇವನು ಇಸ್ರಾಯೇಲರಂತೆ ನಡೆಯದೆ, ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.5ಆದುದರಿಂದ ಯೆಹೋವನು ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದನು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನ ಘನತೆಗಳು ಹೆಚ್ಚಾದವು.6ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದ ದೇಶದಲ್ಲಿದ್ದ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದು ಹಾಕಿಸಿದನು.7ಇವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಅಧಿಕಾರಿಗಳಾದ ಬೆನ್ಹೈಲ್, ಓಬದ್ಯ, ಜೆಕರ್ಯ ನೆತನೇಲ್, ಮಿಕಾಯ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕೋಸ್ಕರ ಯೆಹೂದ ದೇಶದ ಪಟ್ಟಣಗಳಿಗೆ ಕಳುಹಿಸಿದನು.8ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರು ಇದ್ದರು. ಎಲೀಷಾಮಾ, ಯೆಹೋರಾಮ್,9ಇವರು ಯೆಹೋವನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಯೆಹೂದ ದೇಶದ ಪಟ್ಟಣದಲ್ಲೆಲ್ಲಾ ಸಂಚಾರ ಮಾಡಿ ಜನರಿಗೆ ಬೋಧಿಸಿದರು.ಯೆಹೋಷಾಫಾಟನ ವೈಭವ
10ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರೆಗೆ ಯೆಹೋವನ ಭಯವಿದ್ದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.11ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ, ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು.12ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದ ದೇಶದಲ್ಲಿ ಕೋಟೆಗಳನ್ನೂ ಮತ್ತು ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.13ಯೆಹೂದದ ಪಟ್ಟಣಗಳಲ್ಲಿ ದವಸಧಾನ್ಯಗಳ ದೊಡ್ಡ ಮಳಿಗೆಗಳಿದ್ದವು. ಯೆರೂಸಲೇಮಿನಲ್ಲಿ ಯುದ್ಧವೀರರಾದ ಭಟರೂ ಇದ್ದರು.14ಪೂರ್ವಿಕರ ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಗೋತ್ರ ಪ್ರಧಾನರು ಯಾರೆಂದರೆ: ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ಯುದ್ಧವೀರರ ಅಧಿಪತಿಯಾದ ಅದ್ನ;15ಇವನ ತರುವಾಯ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಯುದ್ಧವೀರರ ಅಧಿಪತಿಯಾದ ಯೆಹೋಹಾನಾನ್;16ತರುವಾಯ ಎರಡು ಲಕ್ಷ ಮಂದಿ ಯುದ್ಧವೀರರೊಡನೆ ಸ್ವಇಚ್ಛೆಯಿಂದ ತನ್ನನ್ನೇ ಯೆಹೋವನಿಗೆ ಪ್ರತಿಷ್ಠಿಸಿಕೊಂಡ ಜಿಕ್ರಿಯನ ಮಗನಾದ ಅಮಸ್ಯ;17ಬೆನ್ಯಾಮೀನ್ಯರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಯುದ್ಧವೀರರ ಅಧಿಪತಿಯಾದ ಎಲ್ಯಾದ;18ಒಂದು ಲಕ್ಷದ ಎಂಭತ್ತುಸಾವಿರ ಮಂದಿ ಯುದ್ಧಸನ್ನದ್ಧ ಸೈನಿಕರ ನಾಯಕನಾದ ಯೆಹೋಜಾಬಾದ್ ಎಂಬುವವರು.19ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದ ಈ ಯೋಧರಲ್ಲದೆ, ಕೋಟೆ ಕೊತ್ತಲಗಳುಳ್ಳ ಯೆಹೂದ ಪಟ್ಟಣಗಳಲ್ಲಿಯೂ ಸೈನಿಕರಿದ್ದರು.
18ಮೀಕನಿಗೆ ಯೆಹೋವನ ಪ್ರವಾದನೆ
1ಯೆಹೋಷಾಫಾಟನಿಗೆ ಧನಘನತೆಗಳು ಬಹಳವಾಗಿದ್ದವು. ಅವನು ಅಹಾಬನೊಡನೆ ನೆಂಟಸ್ಥಿಕೆಯನ್ನು ಮಾಡಿಕೊಂಡನು.2ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದನು. ಅಹಾಬನು ಅವನಿಗೂ ಅವನೊಡನೆ ಬಂದ ಜನರಿಗಾಗಿಯೂ ಹಿಂಡುಗಳಿಂದ ಅನೇಕ ದನಕುರಿಗಳನ್ನು ಕೊಯ್ದು ಔತಣವನ್ನು ಏರ್ಪಡಿಸಿದನು. ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್ ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರೇಪಿಸಿದನು.3ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, <<ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?>> ಎಂದು ಕೇಳಿದನು. ಅದಕ್ಕೆ ಅವನು, <<ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು>> ಎಂದು ಉತ್ತರ ಕೊಟ್ಟನು.4ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, <<ಇಂದು ಯೆಹೋವನ ಆಲೋಚನೆಯನ್ನು ಕೇಳು>> ಎಂದು ಕೇಳಿಕೊಂಡನು.5ಅನಂತರ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, <<ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಹೋಗಬಾರದೋ?>> ಎಂದು ಕೇಳಿದನು. ಅವರು, <<ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು>> ಎಂದರು.6ಆದರೆ ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, <<ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೊಬ್ಬ ಪ್ರವಾದಿ ಇಲ್ಲವೇ?>> ಎಂದು ಕೇಳಿದನು.7ಅವನು, <<ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ>> ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, <<ಅರಸನು ಹಾಗನ್ನಬಾರದು>> ಎಂದನು.8ಆಗ ಇಸ್ರಾಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, <<ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ>> ಎಂದು ಆಜ್ಞಾಪಿಸಿದನು.9ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.10ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, <<ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ>> ಎಂದನು.11ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, <<ರಾಮೋತ್ ಗಿಲ್ಯಾದಿಗೆ ಹೋಗು; ನೀನು ಜಯಶಾಲಿಯಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು>> ಎಂದರು.12ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು ಅವನಿಗೆ, <<ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ತಿಳಿಸುತ್ತಿದ್ದಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ತಿಳಿಸು>> ಎಂದು ಹೇಳಿದನು.13ಅದಕ್ಕೆ ಮೀಕಾಯೆಹುವು, <<ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ>> ಎಂದು ಉತ್ತರಕೊಟ್ಟನು.14ಅವನು ಅರಸನ ಬಳಿಗೆ ಬಂದಾಗ ಅರಸನು, <<ಮೀಕಾಯೆಹುವೇ? ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ? ಹೋಗಬಾರದೋ? ಎಂದು ಕೇಳಿದನು. ಅವನು, ಹೋಗಬಹುದು, ಕೃತಾರ್ಥನಾಗಿ ಬರುವಿರಿ, ವೈರಿಗಳು ನಿನ್ನ ಕೈವಶವಾಗುವರು>> ಎಂದು ಹೇಳಿದನು.15ಆಗ ಅರಸನು ಅವನಿಗೆ, <<ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?>> ಎಂದನು16ಆಗ ಅವನು, <<ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, <ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ> >> ಎಂಬುದಾಗಿ ಉತ್ತರಕೊಟ್ಟನು.17ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, <<ಈ ಪ್ರವಾದಿಯು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ, ತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?>> ಎಂದನು.18ಅದಕ್ಕೆ ಮಿಕಾಯೆಹುವು, <<ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.19ಯೆಹೋವನು ತನ್ನ ಹತ್ತಿರ ನಿಂತವರನ್ನು, <ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?> ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.20ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ, <ನಾನು ಹೋಗಿ ಅವನನ್ನು ಪ್ರೇರೇಪಿಸುವೆನು> ಎಂದಿತು. <ಹೇಗೆ ಪ್ರೇರೇಪಿಸುವಿ?> ಎಂದು ಯೆಹೋವನು ಕೇಳಲು,21ಅದು, <ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು> ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, <ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ> ಎಂದನು.22ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ>> ಎಂದು ಹೇಳಿದನು.23ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, <<ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕಾಗಿ ಯಾವ ಮಾರ್ಗವಾಗಿ ಬಂದಿತು?>> ಎಂದನು.24ಅದಕ್ಕೆ ಮೀಕಾಯೆಹುವು, <<ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು>> ಎಂದು ಉತ್ತರ ಕೊಟ್ಟನು.25ಆಗ ಇಸ್ರಾಯೇಲರ ಅರಸನು ಸೇವಕರಿಗೆ, <<ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪಟ್ಟಣದ ಅಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ.26ಅವರಿಗೆ, <ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಹೇಳಿದ್ದಾನೆ> ಎಂದು ಹೇಳಿರಿ>> ಎಂಬುದಾಗಿ ಆಜ್ಞಾಪಿಸಿದನು.27ಮೀಕಾಯೆಹುವು ಅರಸನಿಗೆ, <<ನೀನು ಸುರಕ್ಷಿತನಾಗಿ ಬರುವುದಾದರೆ, ನಾನು ನುಡಿದದ್ದು ಯೆಹೋವನ ಮಾತಲ್ಲ>> ಎಂದು ಹೇಳಿ, <<ಮಹಾ ಜನರೇ, ನನ್ನ ಮಾತನ್ನು ಗಮನದಲ್ಲಿಟ್ಟುಕೊಳ್ಳಿರಿ>> ಎಂದು ಕೂಗಿ ಹೇಳಿದನು.ಆಹಾಬನ ಮರಣ
28ಇಸ್ರಾಯೇಲರ ಅರಸನೂ ಹಾಗೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೊರಟರು.29ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, <<ನಾನು ವೇಷ ಹಾಕಿಕೊಂಡು ಯುದ್ಧ ಭೂಮಿಗೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ>> ಎಂದು ಹೇಳಿ ವೇಷ ಹಾಕಿಕೊಂಡನು; ತರುವಾಯ ಯುದ್ಧ ಭೂಮಿಗೆ ಹೋದರು.30ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, <<ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ, ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ>> ಎಂದು ಆಜ್ಞಾಪಿಸಿದ್ದನು.31ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.32ಅವನು ಇಸ್ರಾಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂತಿರುಗಿದರು.33ಅರಾಮ್ಯರ ಒಬ್ಬ ಸೈನಿಕನು ಗುರಿಯಿಡದೆ ಸುಮ್ಮನೆ ಒಂದು ಬಾಣವನ್ನೆಸೆಯಲು, ಆ ಬಾಣವು ಇಸ್ರಾಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, <<ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ>> ಎಂದು ಹೇಳಿದನು.34ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಇಸ್ರಾಯೇಲರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು. ಸೂರ್ಯಾಸ್ತಮಾನವಾದಾಗ ಅವನು ಸತ್ತನು.
19ಯೆಹೋಷಾಫಾಟನ ಖಂಡನೆ
1ಯೆಹೂದದ ಅರಸನಾದ ಯೆಹೋಷಾಫಾಟನು ಸುರಕ್ಷಿತವಾಗಿ ಯೆರೂಸಲೇಮಿಗೆ ಹಿಂದಿರುಗಿದನು.2ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, <<ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.3ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ>> ಎಂಬುದಾಗಿ ಹೇಳಿದನು.ನ್ಯಾಯಾಲಯಗಳ ಸ್ಥಾಪನೆ
4ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದು, ಮತ್ತೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದ ವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಿಕರ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು.5ಅವನು ಯೆಹೂದ ದೇಶದ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.6ಅವನು ಅವರಿಗೆ, <<ನೀವು ಹೇಗೆ ಕೆಲಸ ನಿರ್ವಹಿಸುತ್ತೀರಿ ಎಂಬುದರ ಬಗ್ಗೆ ಎಚ್ಚರಿಕೆಯಿಂದಿರಿ. ನೀವು ನ್ಯಾಯತೀರಿಸುವುದು ಮನುಷ್ಯರಿಗಾಗಿ ಅಲ್ಲ, ಯೆಹೋವನಿಗಾಗಿ. ನ್ಯಾಯವಿಚಾರಣೆ ಮಾಡುವಾಗ ಆತನು ನಿಮ್ಮ ಮಧ್ಯದಲ್ಲಿ ಇರುತ್ತಾನೆ.7ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ>> ಎಂದು ಎಚ್ಚರಿಸಿದನು.8ಇದಲ್ಲದೆ, ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಲೇವಿಯರಿಂದಲೂ, ಯಾಜಕರಿಂದಲೂ, ಇಸ್ರಾಯೇಲ್ ಗೋತ್ರ ಪ್ರಧಾನರಿಂದಲೂ, ಕೆಲವರನ್ನು ಆರಿಸಿ ಯೆಹೋವನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ, ಕಲಹಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವುದಕ್ಕಾಗಿ ಅವರನ್ನು ಯೆರೂಸಲೇಮಿನಲ್ಲೇ ಇರಿಸಿದನು.9ಅವರಿಗೆ, <<ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸಗಳು ಯಾವುದೆಂದರೆ,10ಯೆಹೂದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ, ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿ ನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ನೀವು ಅವರೊಂದಿಗೆ ದೇವರ ಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗಿರುವಿರಿ.11ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು>> ಎಂದು ಹೇಳಿದನು.
20ಯೆಹೋಷಾಫಾಟನು ಮೋವಾಬ್ಯರನ್ನೂ ಅಮ್ಮೋನಿಯರನ್ನೂ ಸೋಲಿಸಿದ್ದು
1ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಹಾಗೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.2ದೂತರು ಬಂದು ಯೆಹೋಷಾಫಾಟನಿಗೆ, <<ಮಹಾಸಮೂಹವು ನಿನಗೆ ವಿರುದ್ಧವಾಗಿ ಲವಣ ಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ <ಏಂಗೆದಿ> ಎನಿಸಿಕೊಳ್ಳುವ ಹಚಚೋನ್ ತಾಮಾರಿನಲ್ಲಿ ಬಂದು ತಂಗಿದ್ದಾರೆ>> ಎಂದು ತಿಳಿಸಿದರು.3ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.4ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.5ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದು ಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,6<<ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?7ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?.8ಅವರು ಈ ದೇಶದಲ್ಲಿ ನೆಲಗೊಂಡು ಇದರಲ್ಲಿ ನಿನ್ನ ಹೆಸರಿಗಾಗಿ ಪವಿತ್ರಾಲಯವನ್ನು ಕಟ್ಟಿದರು.9ತಮ್ಮ ಮೇಲೆ ನ್ಯಾಯ ತೀರ್ಪಿನ ಖಡ್ಗ, ಘೋರವ್ಯಾಧಿ, ಕ್ಷಾಮ ಮೊದಲಾದ ಆಪತ್ತುಗಳು ನಮಗೆ ಬರುವಾಗ, ನಾವು ನಿನ್ನ ನಾಮ ಮಹತ್ತು ಇರುವ ಈ ಆಲಯದ ಮುಂದೆಯೂ, ನಿನ್ನ ಮುಂದೆಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿನಗೆ ಮೊರೆಯಿಡುವುದಾದರೆ ನೀನು ಕೇಳಿ ರಕ್ಷಿಸುವಿ ಎಂದುಕೊಂಡಿದ್ದೇವೆ.10ಈ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ ಸೇಯೀರ್ ಪರ್ವತ ಪ್ರದೇಶದವರನ್ನೂ ನೋಡು, ಇಸ್ರಾಯೇಲರು ಐಗುಪ್ತ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲಾ.11ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀನು ನಮಗೆ ಅನುಗ್ರಹಿಸಿದ ಸ್ವತ್ತಿನೊಳಗಿಂದ ನಮ್ಮನ್ನು ಹೊರ ಓಡಿಸುವುದಕ್ಕಾಗಿ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.12ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ>> ಎಂದು ಪ್ರಾರ್ಥಿಸಿದನು.13ಎಲ್ಲಾ ಯೆಹೂದ್ಯರೂ ಅವರ ಹೆಂಡತಿ ಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.14ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.15ಅವನು, <<ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.16ನಾಳೆ ಬೆಳಗ್ಗೆ ಅವರಿಗೆ ವಿರುದ್ಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್ ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.17ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು>> ಎಂದು ಹೇಳಿದನು.18ಆಗ ಯೆಹೋಷಾಫಾಟನು ನೆಲದವರೆಗೂ ಬಗ್ಗಿ ನಮಸ್ಕರಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.19ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ, ಕೋರಹಿಯರೂ ಎದ್ದು, ಇಸ್ರಾಯೇಲ್ ದೇವರಾದ ಯೆಹೋವನನ್ನು ಮಹಾಸ್ವರದಿಂದ ಕೀರ್ತಿಸಿದರು.20ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, <<ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ>> ಎಂದು ಹೇಳಿದನು.21ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, <<ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, <ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು> ಎಂದು ಭಜಿಸಿರಿ>> ಎಂಬುದಾಗಿ ಆಜ್ಞಾಪಿಸಿದನು.22ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.23ಅಮ್ಮೋನಿಯರೂ, ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಸಂಪೂರ್ಣವಾಗಿ ಸಂಹರಿಸಿಬಿಟ್ಟರು. ಅಮ್ಮೋನಿಯರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.24ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ, ನೆಲದ ಮೇಲೆ ಬಿದ್ದಿರುವ ಹೆಣಗಳ ಹೊರತಾಗಿ, ಜೀವದಿಂದುಳಿದವರು ಯಾರು ಕಾಣಿಸಲಿಲ್ಲ.25ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು.26ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನ ವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.27ಆ ನಂತರ ಯೆಹೂದ್ಯರೂ ಯೆರೂಸಲೇಮಿನವರೂ ಅವರ ಮುಂದೆ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇಮಿಗೆ ಹಿಂತಿರುಗಿದರು.28ಅವರು ಸ್ವರಮಂಡಲ, ಕಿನ್ನರಿ, ತುತ್ತೂರಿ, ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.29ಯೆಹೋವನು ತಾನೇ ಇಸ್ರಾಯೇಲರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.30ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು.ಯೆಹೋಷಾಫಾಟನ ಅಂತ್ಯ
31ಯೆಹೂದ್ಯರ ಅರಸನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದಾಗ ಮೂವತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಡಳಿತ ನಡೆಸಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.32ಇವನು ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಅದನ್ನು ಮೀರದೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.33ಅದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ, ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ.34ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆಯಲಾಗಿದೆ.35ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನೂ, ಬಹು ದುರಾಚಾರಿಯೂ ಆದ ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡನು.36ಅವರು ತಾರ್ಷೀಷಿಗೆ ಹೋಗುವುದಕ್ಕಾಗಿ ಹಡುಗುಗಳನ್ನು ಕಟ್ಟಬೇಕೆಂದು ಒಡಬಂಡಿಕೆ ಮಾಡಿಕೊಂಡು ಅವುಗಳನ್ನು ಎಚ್ಯೋನ್ ಗೆಬೆರಿನಲ್ಲಿ ಕಟ್ಟಿಸಿದರು.37ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, <<ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು>> ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.
21ಅರಸನಾದ ಯೆಹೋರಾಮನು
1ಯೆಹೋಷಾಫಾಟನು ಪೂರ್ವಿಕರ ಬಳಿಗೆ ಸೇರಿದನು. ದಾವೀದನಗರದಲ್ಲಿ ಅವನನ್ನು ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದ ಮೇಲೆ, ಅವನ ಮಗನಾದ ಯೆಹೋರಾಮನು ಅರಸನಾದನು.2ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮಿಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಇಸ್ರಾಯೇಲರ ಅರಸನಾದ ಯೆಹೋಷಾಫಾಟನ ಮಕ್ಕಳು.3ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ, ಶ್ರೇಷ್ಠವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.4ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.5ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.6ಅವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ, ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.7ಆದರೂ ಯೆಹೋವನು ದಾವೀದನಿಗೆ, <<ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ>> ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.8ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.9ಆಗ ಯೆಹೋರಾಮನು ರಾತ್ರಿಯಲ್ಲಿ ತನ್ನ ಸರದಾರರನ್ನೂ ಎಲ್ಲಾ ರಥಬಲವನ್ನೂ ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿದನು.ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿ ಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು.10ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು.11ಅವನು ಯೆಹೂದದ ಗುಡ್ಡಗಳಲ್ಲಿ, ಪೂಜಾ ಸ್ಥಳಗಳನ್ನು ಏರ್ಪಡಿಸಿ ಯೆರೂಸಲೇಮಿನವರನ್ನು ದೈವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.12ಹೀಗಿರಲಾಗಿ, ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ, <<ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು; ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿ ನಡೆಯಲಿಲ್ಲ;13ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಂಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ.14ಆದುದರಿಂದ ಯೆಹೋವನು ನಿನ್ನ ಪ್ರಜೆಗಳ, ಹೆಂಡತಿ ಮಕ್ಕಳನ್ನೂ, ಆಸ್ತಿಪಾಸ್ತಿ ಸರ್ವಸ್ವವನ್ನೂ ಮಹಾ ಆಪತ್ತಿಗೆ ಗುರಿಮಾಡುವನು.15ನಿನಗಾದರೋ ಕರುಳು ಬೇನೆಯ ಕಠಿಣ ರೋಗ ಬರುವುದು. ಅದು ಬಹು ದಿನಗಳವರೆಗೂ ಇದ್ದು ವಾಸಿಯಾಗದೇ ನಿನ್ನ ಕರುಳುಗಳು ಹೊರಗೆ ಬೀಳುವುವು>> ಎಂದು ತಿಳಿಸಿದನು.16ಯೆಹೋವನು ಫಿಲಿಷ್ಟಿಯರನ್ನೂ, ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದನು.17ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ, ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ.18ಇದೆಲ್ಲಾ ಆದಮೇಲೆ, ಯೆಹೋವನು ಅವನ ಕರುಳುಗಳಲ್ಲಿ ವಾಸಿಯಾಗಲಾರದ ರೋಗವನ್ನು ಉಂಟುಮಾಡಿದನು.19ಕ್ರಮೇಣವಾಗಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಆದೇ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗಾಗಿ ಧೂಪಹಾಕಿದ ಹಾಗೆ ಅವನಿಗೆ ಹಾಕಲಿಲ್ಲ.20ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ರಾಜ್ಯಭಾರಮಾಡಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ. ಅವನು ಯಾರಿಗೂ ಇಷ್ಟವಿಲ್ಲದವನಾಗಿ ಗತಿಸಿಹೋದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜರ ಸಮಾಧಿಗಳಲ್ಲಿ ಅವನನ್ನು ಸಮಾಧಿಮಾಡಲಿಲ್ಲ.
22ಅರಸನಾದ ಅಹಜ್ಯನು
1ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.2ಅಹಜ್ಯನು ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷವಾಗಿತ್ತು. ಅವನು ಯೆರೂಸಲೇಮಿನಲ್ಲಿ ಒಂದು ವರ್ಷ ಆಡಳಿತ ನಡೆಸಿದನು. ಒಮ್ರಿಯನ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.3ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.4ಅವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ, ಅವನಿಗೆ ತಪ್ಪಾದ ಸಲಹೆ ಕೊಡುವವರಾದರು. ಆದುದರಿಂದ ಅವನು ಯೆಹೋವನಿಗೆ ವಿರುದ್ಧವಾಗಿ ದ್ರೋಹಿಯಾಗಿ ನಡೆದನು.5ಅವರ ಪ್ರೇರಣೆಯಿಂದಲೇ ಅವನು ಇಸ್ರಾಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ, ರಾಮೋತ್ ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು.6ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.7ಅಹಜ್ಯನು ಯೋರಾಮನ ಬಳಿಗೆ ಹೋದದ್ದು ದೈವಸಂಕಲ್ಪದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ಪಟ್ಟಾಭಿಷೇಕ ಮಾಡಿಸಿದ್ದನು.8ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ, ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ, ಅಹಜ್ಯನಿಗೆ ಸೇವೆಮಾಡುತ್ತಿದ್ದ, ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು.9ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, <<ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ>> ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.ರಾಣಿಯಾದ ಅತಲ್ಯಳು
10ಅಹಜ್ಯನು ಮರಣ ಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದ ಕೂಡಲೆ ಯೆಹೂದ ರಾಜ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.11ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.12ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.
23ರಾಣಿಯಾದ ಅತಲ್ಯಳ ವಿರುದ್ಧ ದಂಗೆ
1ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಪ್ಪಂದ ಮಾಡಿಕೊಂಡನು.2ಇವರು ಯೆಹೂದದಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲರ ಗೋತ್ರ ಪ್ರಧಾನರನ್ನೂ ಒಟ್ಟುಗೂಡಿಸಲು ಅವರು ಯೆರೂಸಲೇಮಿಗೆ ಬಂದರು.3ಹೀಗೆ ಕೂಡಿ ಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, <<ಇಗೋ, ರಾಜಪುತ್ರನು, ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಅರಸನಾಗತಕ್ಕವನು ಇವನೇ.4ಈಗ ನೀವು ಮಾಡತಕ್ಕದ್ದು ಏನೆಂದರೆ: ಸಬ್ಬತ್ ದಿನದಂದು ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ, ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.5ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು.6ಯಾಜಕರೂ ಹಾಗು ಸೇವೆಯಲ್ಲಿರುವ ಲೇವಿಯರು ಹೊರತಾಗಿ ಯಾರೂ ಆಲಯದೊಳಗೆ ಬರಬಾರದು. ಏಕೆಂದರೆ ಅವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಅಜ್ಞಾನುಸಾರವಾಗಿ ಹೊರಗಿರಬೇಕು.7ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು>> ಎಂದು ಹೇಳಿದನು.8ಲೇವಿಯ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು.9ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.10ಆಯುಧಪಾಣಿಗಳಾದ ಎಲ್ಲಾ ಜನರನ್ನು ಅರಸನ ಸುತ್ತಲೂ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯ ವರೆಗೂ ಸಾಲಾಗಿ ನಿಲ್ಲಿಸಿದನು.11ಆಮೇಲೆ ಯೆಹೋಯಾದನ ಮಕ್ಕಳು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ಅಭಿಷೇಕ ಮಾಡಿದರು. ಕೂಡಲೆ ಜನರು, <<ಅರಸನು ಚಿರಂಜೀವಿಯಾಗಿರಲಿ>> ಎಂದು ಹರಸಿದರು.12ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಇದ್ದ ಯೆಹೋವನ ಆಲಯಕ್ಕೆ ಬಂದಳು.13ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, <<ದ್ರೋಹ, ದ್ರೋಹ>> ಎಂದು ಕೂಗಿದಳು.14ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, <<ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ>> ಎಂದು ಆಜ್ಞಾಪಿಸಿದನು.15ಅವರು ಆಕೆಯನ್ನು ಹಿಡಿದು ಅರಸನ ಅರಮನೆಗೆ ಹೋಗುವ ಕುದುರೆ ಬಾಗಿಲಿನ ತನಕ ಒಯ್ದು, ಅವಳನ್ನು ಕೊಂದು ಹಾಕಿದರು.ಯೆಹೋಯಾದನಿಂದ ಧಾರ್ಮಿಕ ಸುಧಾರಣೆ
16ಆ ನಂತರ ಯೆಹೋಯಾದನು ಎಲ್ಲಾ ಜನರನ್ನೂ, ಅರಸನನ್ನೂ ಪ್ರೇರೇಪಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣ ಮಾಡಿದನು.17ತರುವಾಯ ಜನರೆಲ್ಲರೂ ಬಾಳನ ಕ್ಷೇತ್ರಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಎದುರಿನಲ್ಲಿಯೇ ಕೊಂದುಹಾಕಿದನು; ಆ ಕ್ಷೇತ್ರವನ್ನೂ ಅದರಲ್ಲಿದ್ದ ಯಜ್ಞವೇದಿ ಹಾಗೂ ವಿಗ್ರಹಗಳನ್ನೂ ಒಡೆದುಹಾಕಿ ಹಾಳುಮಾಡಿ ಬಿಟ್ಟರು.18ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.19ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.20ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗೂ ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.21ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.
24ಯೆಹೂದದ ಅರಸನಾದ ಯೆಹೋವಾಷನು
1ಯೆಹೋವಾಷನು ಅರಸನಾದಾಗ ಏಳು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ರಾಜ್ಯಭಾರ ಮಾಡಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.2ಯೆಹೋವಾಷ ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.3ಯೆಹೋಯಾದನು, ಯೆಹೋವಾಷನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಸಿದನು; ಅರಸನು ಗಂಡು ಹೆಣ್ಣು ಮಕ್ಕಳನ್ನು ಪಡೆದನು.4ಕ್ರಮೇಣ ಯೆಹೋವಾಷನು ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡುವುದಕ್ಕೆ ಮನಸ್ಸು ಮಾಡಿದನು.5ಯಾಜಕರನ್ನೂ ಲೇವಿಯರನ್ನೂ ಒಟ್ಟಿಗೆ ಸೇರಿಸಿ ಅವರಿಗೆ, <<ನೀವು ಯೆಹೂದದ ಪಟ್ಟಣಗಳಿಗೆ ಹೋಗಿ, ನಿಮ್ಮ ದೇವರಾದ ಯೆಹೋವನ ಆಲಯದ ವಾರ್ಷಿಕ ಜೀರ್ಣೋದ್ಧಾರ ಮಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರಿಂದ ಹಣ ಸಂಗ್ರಹಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ>> ಎಂದು ಆಜ್ಞಾಪಿಸಿದನು. ಆದರೂ ಲೇವಿಯರು ಅವಸರ ಮಾಡಲಿಲ್ಲ.6ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, <<ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?7ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳನಿಗಾಗಿ ಕೊಟ್ಟು ಬಿಟ್ಟಿದ್ದಾರಲ್ಲಾ?>> ಎಂದು ಹೇಳಿದನು.8ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಿಲಿನ ಹೊರಗೆ ಇರಿಸಿದನು.9ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು.10ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು.11ಪೆಟ್ಟಿಗೆ ತುಂಬಾ ಹಣವಿರುತ್ತದೆಂದು ಕಂಡು ಬಂದಾಗೆಲ್ಲಾ ಲೇವಿಯರು ಪೆಟ್ಟಿಗೆಯನ್ನು, ಆಸ್ಥಾನದ ಅಧಿಕಾರಿಗಳ ಬಳಿಗೆ ತರುತ್ತಿದ್ದರು. ಆಗ ಅರಸನ ಲೇಖಕನೂ, ಮಹಾಯಾಜಕನ ಉದ್ಯೋಗಸ್ಥನೂ ಬಂದು ಅದನ್ನು ತೆರವು ಮಾಡಿ ಮತ್ತೆ ಅದನ್ನು ಅದರ ಸ್ಥಳದಲ್ಲಿಡುತ್ತಿದ್ದರು.12ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಅವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗಳನ್ನೂ, ಬಡಗಿಯರನ್ನೂ, ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ, ಕಂಚುಗಾರರನ್ನೂ ಕೆಲಸಕ್ಕೆ ನೇಮಿಸಿದರು.13ಕೆಲಸ ಮಾಡುವವರು ಆಸಕ್ತಿಯಿಂದ ಜೀರ್ಣೋದ್ಧಾರದ ಕೆಲಸವನ್ನು ಮಾಡಿ ಮುಗಿಸಿದರು. ಹೀಗೆ ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.14ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.15ಯೆಹೋಯಾದನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರ್ಷದವನಾಗಿದ್ದನು.16ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.ಯೆಹೋವಾಷನ ದುಷ್ಟತನ
17ಯೆಹೋಯಾದನು ಮೃತನಾದ ಮೇಲೆ ಯೆಹೂದ ಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು.18ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು.19ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.20ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, <<ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ>> ಎಂದನು.21ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.22ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, <<ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ>> ಎಂದನು.23ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಯೆಹೂದ ದೇಶದೊಳಗೆ ನುಗ್ಗಿ, ಯೆರೂಸಲೇಮಿಗೆ ಬಂದು ಇಸ್ರಾಯೇಲರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮ ಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿಬಿಟ್ಟರು.24ಅರಾಮ್ಯ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಯೆಹೋವನು ಅರಾಮ್ಯರ ಕೈಯಲ್ಲಿ ಸೋಲುವಂತೆ ಮಾಡಿ, ಯೆಹೋವಾಷನನ್ನು ಅವರ ಮುಖಾಂತರ ಶಿಕ್ಷಿಸಿದನು.25ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.26ಅಮ್ಮೋನಿಯರ ದೇಶದ ಶಿಮ್ಗಾತೆಂಬಾಕೆಯ ಮಗನಾದ ಜಾಬಾದ್, ಮೋವಾಬ್ ದೇಶದ ಶಿಮ್ರಾತೆಂಬಾಕೆಯ ಮಗನಾದ ಯೆಹೋಜಾಬಾದ್ ಎಂಬುವರೇ ಅವನ ವಿರುದ್ಧವಾಗಿ ಒಳಸಂಚು ಮಾಡಿದವರು.27ಅವನ ಮಕ್ಕಳು ಅವನಿಗೆ ವಿರುದ್ಧವಾಗಿ ಹೇಳಲಾದ ಅನೇಕ ದೈವೋಕ್ತಿಗಳೂ, ಹಾಗು ದೇವಾಲಯದ ಜೀರ್ಣೋದ್ಧಾರ ವೃತ್ತಾಂತವು, ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ದಾಖಲಿಸಲಾಗಿದೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
25ಯೆಹೂದದ ಅರಸನಾದ ಅಮಚ್ಯನು
1ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳ್ವಿಕೆ ಮಾಡಿದನು. ಯೆರೂಸಲೇಮಿನವಳಾದ ಯೆಹೋವದ್ದಾನ್ ಎಂಬಾಕೆಯು ಅವನ ತಾಯಿ.2ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.3ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.4ಆದರೆ, <<ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು>> ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪು ಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.5ಆಮೇಲೆ ಅಮಚ್ಯನು ಯೆಹೂದ್ಯರನ್ನು ಒಟ್ಟಾಗಿ ಸೇರಿಸಿ ಸಹಸ್ರಾಧಿಪತಿ, ಶತಾಧಿಪತಿಗಳ ಕೈಕೆಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳಲ್ಲಿ ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟವರನ್ನು ಲೆಕ್ಕ ಮಾಡಿಸಿದನು. ಅವರಲ್ಲಿ ಬರ್ಜಿ ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷ ಮಂದಿ ಸಿಕ್ಕಿದರು.6ಇದಲ್ಲದೆ ಅವನು ನೂರು ತಲಾಂತು ಬೆಳ್ಳಿಯನ್ನು ಕೊಟ್ಟು, ಇಸ್ರಾಯೇಲರಿಂದಲೂ ಲಕ್ಷ ಮಂದಿ ಭಟರನ್ನು ತರಿಸಿದನು.7ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, <<ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲರನ್ನೆಲ್ಲಾ ಕೈಬಿಟ್ಟಿದ್ದಾನೆ.8ನೀನೇ ಹೋಗಿ ಆ ಕಾರ್ಯವನ್ನು ನಿರ್ವಹಿಸು; ಧೈರ್ಯದಿಂದ ಯುದ್ಧಮಾಡು. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನೀನು ಅಪಜಯಹೊಂದುವಂತೆ ಮಾಡುವನು, ಜಯಾ, ಅಪಜಯಗಳನ್ನು ಉಂಟುಮಾಡುವುದಕ್ಕೆ ಆತನು ಶಕ್ತನಾಗಿರುತ್ತಾನಲ್ಲವೆ?>> ಎಂದನು.9ಅಮಚ್ಯನು ದೇವರ ಮನುಷ್ಯನನ್ನು, <<ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ನಾನೇನು ಮಾಡಬೇಕು?>> ಎಂದು ಕೇಳಲು ಅವನು, <<ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು>> ಎಂದನು.10ಆಗ ಅಮಚ್ಯನು ಎಫ್ರಾಯೀಮ್ಯ ರಿಂದ ಬಂದ ಸೈನಿಕರನ್ನು ಬೇರೆ ಮಾಡಿ, ಅವರನ್ನು ಅವರ ದೇಶಕ್ಕೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಬಹಳ ಕೋಪಗೊಂಡು ತಮ್ಮ ದೇಶಕ್ಕೆ ಹೊರಟು ಹೋದರು.11ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು.12ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು, ಅವರೆಲ್ಲರೂ ಚೂರು ಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.13ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು ಸಮಾರ್ಯಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಯೆಹೂದ ಪಟ್ಟಣಗಳ ಮೇಲೆ ದಾಳಿಮಾಡಿ ಮೂರು ಸಾವಿರ ಜನರನ್ನು ಕೊಂದು, ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು14ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ಪ್ರತಿಷ್ಠಿಸಿ ಅವುಗಳಿಗೆ ಅಡ್ಡಬಿದ್ದು ಧೂಪ ಹಾಕುತ್ತಿದ್ದನು.15ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ, <<ನಿನ್ನ ಕೈಯಿಂದ ನಿನ್ನ ಜನರನ್ನು ರಕ್ಷಿಸಲಾರದೆ ಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?>> ಎಂದು ಕೇಳಿದನು.16ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, <<ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?>> ಎಂದನು. ಅವನು, <<ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ>> ಎಂದು ಹೇಳಿ ಸುಮ್ಮನಾದನು.17ಅನಂತರ ಯೆಹೂದದ ಅರಸನಾದ ಅಮಚ್ಯನು ಸಮಾಲೋಚನೆ ನಡೆಸಿ, ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನೂ ಆದ ಯೋವಾಷನಿಗೆ, <<ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ>> ಎಂದು ದೂತರ ಮುಖಾಂತರವಾಗಿ ಹೇಳಿ ಕಳುಹಿಸಿದನು.18ಆಗ ಇಸ್ರಾಯೇಲರ ಅರಸನಾದ ಯೋವಾಷನು ಯೆಹೂದ್ಯರ ಅರಸನಾದ ಅಮಚ್ಯನಿಗೆ, <<ಲೆಬನೋನಿನ ಒಂದು ಮುಳ್ಳುಗಿಡವು, ಅಲ್ಲಿನ ದೇವದಾರು ಮರಕ್ಕೆ, <ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು> ಎಂದು ಹೇಳಿ ಕಳುಹಿಸಿತು. ತುಸು ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗವು ಆ ಮಾರ್ಗವಾಗಿ ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿದು ಬಿಟ್ಟಿತು.19ಅಹಹ! ಎದೋಮ್ಯರನ್ನು ಸೋಲಿಸಿ ಬಹಳ ಕೀರ್ತಿಯನ್ನು ಪಡಕೊಂಡೆ, ಎಂದು ನೀನು ಹೆಮ್ಮೆಪಡುತಿರುವೆ; ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೇ? ನನ್ನನ್ನು ಕೆಣಕಿ ನಿನಗೂ ನಿನ್ನ ಯೆಹೂದ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ>> ಎಂದು ಉತ್ತರಕೊಟ್ಟನು.20ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಅದು ದೇವರ ಸಂಕಲ್ಪದಿಂದಲೇ ಆಯಿತು. ಯೆಹೂದ್ಯರು ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಅಪಜಯ ಮಾಡಬೇಕೆಂದು ಯೆಹೋವನು ನಿರ್ಣಯಿಸಿದ್ದನು.21ಇಸ್ರಾಯೇಲರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.22ಯೆಹೂದ್ಯರು ಇಸ್ರಾಯೇಲ್ಯರಿಗೆ ಸೋತು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.23ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದದ ಅರಸನೂ, ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಹಾಕಿದ್ದಲ್ಲದೆ,24ಅವನು ಓಬೇದೆದೋಮನ ವಶದಲ್ಲಿದ್ದ ದೇವಾಲಯದ ಎಲ್ಲ ಬೆಳ್ಳಿಬಂಗಾರವನ್ನು, ಪಾತ್ರೆಗಳನ್ನು, ಅರಸನ ಅರಮನೆಯ ಭಂಡಾರಗಳಲ್ಲಿದ್ದುದೆಲ್ಲವನ್ನು ತೆಗೆದುಕೊಂಡು, ಹೊಣೆಗಾರರಾದ ಕೆಲವರನ್ನು ಸೆರೆ ಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.25ಇಸ್ರಾಯೇಲರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತ ನಂತರ, ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.26ಅಮಚ್ಯನ ಉಳಿದ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಾಯೇಲರ ರಾಜರ ಗ್ರಂಥಗಳಲ್ಲಿ ಬರೆಯಲ್ಪಟ್ಟಿವೆ.27ಅಮಚ್ಯನು ಯೆಹೋವನನ್ನು ತ್ಯಜಿಸಿದ್ದರಿಂದ ಯೆರೂಸಲೇಮಿನವರು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡುತ್ತಿದ್ದರು. ಆದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.28ಅವನ ಜನರು ಆ ಶವವನ್ನು ಕುದುರೆಯ ಮೇಲೆ ಯೆರೂಸಲೇಮ್ ಪಟ್ಟಣಕ್ಕೆ ತಂದು ಯೆಹೂದದ ರಾಜಧಾನಿಯೊಳಗೆ ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು.
26ಯೆಹೂದದ ಅರಸನಾದ ಉಜ್ಜೀಯನು
1ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.2ಇವನು ಏಲೋತ್ ಪಟ್ಟಣವನ್ನು ಪುನಃ ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.3ಅವನು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ.4ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.5ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.6ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.7ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.8ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನ್ನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.9ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು.10ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.11ಇದಲ್ಲದೆ, ಉಜ್ಜೀಯನಿಗೆ ಯುದ್ಧಕ್ಕೋಸ್ಕರ ಸೈನ್ಯವೂ ಇತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ ಇವರು ಹಾಕಿಕೊಟ್ಟ ಪಟ್ಟಿಯಕ್ರಮ ಪ್ರಕಾರ ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರವಾಗಿ. ಆಯಾ ಗುಂಪುಗಳು ಯುದ್ಧಕ್ಕೆ ಹೊರಡುತ್ತಿದ್ದವು.12ಯುದ್ಧವೀರರೂ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು.13ಇವರ ಕೈಕೆಳಗಿದ್ದ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರುದ್ಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.14ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿ ಕೊಟ್ಟನು.15ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.ಉಜ್ಜೀಯನ ಪಾಪವೂ ಶಿಕ್ಷೆಯೂ
16ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.17ಆಗ ಮಹಾಯಾಜಕನಾದ ಅಜರ್ಯನೂ ಹಾಗು ಧೈರ್ಯಶಾಲಿಗಳಾದ ಯೆಹೋವನ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ18ಅರಸನ ಎದುರಿಗೆ ನಿಂತು ಅವನಿಗೆ, <<ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು>> ಎಂದರು.19ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು.20ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.21ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.22ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.23ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.
27ಯೆಹೂದದ ಅರಸನಾದ ಯೋತಾಮನು
1ಯೋತಾಮನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷಗಳ ಕಾಲ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆಯು ಇವನ ತಾಯಿ.2ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಆದರೆ ಅವನಂತೆ ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.3ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ, ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.4ಇದಲ್ಲದೆ, ಇವನು ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ, ಕಾಡುಗಳಲ್ಲಿ ದುರ್ಗಗಳನ್ನೂ, ಗೋಪುರಗಳನ್ನೂ ಕಟ್ಟಿಸಿದನು.5ಅಮ್ಮೋನಿಯರ ಅರಸರೊಡನೆ ಯುದ್ಧ ಮಾಡಿ ಅವರನ್ನು ಗೆದ್ದನು. ಅಮ್ಮೋನಿಯರು ಆ ವರ್ಷದಲ್ಲಿ ಇವನಿಗೆ ನೂರು ತಲಾಂತು ಬೆಳ್ಳಿ, ಹತ್ತು ಸಾವಿರ ಕೋರ್ (ಸಾವಿರ ಮೆಟ್ರಿಕ್ ಟನ್) ಗೋದಿ, ಹತ್ತು ಸಾವಿರ ಕೋರ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರ್ಷಗಳಲ್ಲಿಯೂ ಹೀಗೆಯೇ ಕೊಟ್ಟರು.6ಯೋತಾಮನು ತನ್ನ ದೇವರಾದ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಂಡದ್ದರಿಂದ ಬಲವುಳ್ಳವನಾದನು.7ಯೋತಾಮನ ಉಳಿದ ಚರಿತ್ರೆಯೂ, ಅವನು ನಡೆಸಿದ ಯುದ್ಧಗಳು ಹಾಗೂ ಕಾರ್ಯ ಚಟುವಟಿಕೆಗಳು ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥಗಳಲ್ಲಿ ಬರೆಯಲ್ಪಟ್ಟಿದೆ.8ಅವನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳ್ವಿಕೆ ನಡೆಸಿದನು.9ಯೋತಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.
28ಯೆಹೂದದ ಅರಸನಾದ ಆಹಾಜನು
1ಆಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಅವನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟುಬಿಟ್ಟನು.2ಅವನು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು, ಬಾಳ್ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿದ್ದಲ್ಲದೆ3ಅವನು ಬೆನ್ ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಅಗ್ನಿಪ್ರವೇಶ ಮಾಡಿಸಿದನು.4ಪೂಜಾಸ್ಥಳಗಳಲ್ಲೂ, ಗುಡ್ಡಗಳ ಮೇಲೆ ಹಾಗೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಗಳನ್ನೂ, ಧೂಪಗಳನ್ನೂ ಸಮರ್ಪಿಸಿದನು.5ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.6ರೆಮಲ್ಯನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು.7ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬುವವರನ್ನು ಎಫ್ರಾಯೀಮ್ ದೇಶದ ಜಿಕ್ರಿಯೆಂಬ ಶೂರನು ಕೊಂದನು.8ಇದಲ್ಲದೆ, ಇಸ್ರಾಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಹೆಂಗಸರನ್ನೂ, ಗಂಡು, ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನೂ ಸೂರೆಮಾಡಿಕೊಂಡು ಸಮಾರ್ಯಕ್ಕೆ ಒಯ್ದರು.9ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ಅ ವನ ಹೆಸರು ಓದೇದ್. ಅವನು ಸಮಾರ್ಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ, <<ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು.10ಇದು ಸಾಲದೆಂದು ನೀವು ಯೆಹೂದ್ಯರನ್ನು, ಯೆರೂಸಲೇಮಿನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ, ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೇ?11ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಇಲ್ಲವಾದರೆ ಯೆಹೋವನ ಕೋಪಾಗ್ನಿಯೂ ನಿಮ್ಮ ಮೇಲೆ ಉರಿಯುತ್ತದೆಯಷ್ಟೇ>> ಎಂದನು.12ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ, ಹದ್ಲೈಯನ ಮಗನಾದ ಅಮಾಸ ಎಂಬುವವರು ಯುದ್ಧದಿಂದ ಬರುವವರ ಮುಂದೆ ನಿಂತು,13ಅವರಿಗೆ, <<ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿರಿ; ನೀವು ನಮ್ಮ ಪಾಪ ಅಪರಾಧಗಳ ಜೊತೆಯಲ್ಲಿ ಯೆಹೋವನಿಗೆ ವಿರುದ್ಧವಾದ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುವಿರಾ? ನಮ್ಮ ಅಪರಾಧವು ದೊಡ್ಡದು; ಇಸ್ರಾಯೇಲರ ಮೇಲಿರುವ ದೈವಕೋಪವು ಉಗ್ರವಾಗಿದೆ>> ಎಂದು ಹೇಳಿದರು.14ಭಟರು ಇದನ್ನು ಕೇಳಿ ಸೆರೆಯವರನ್ನೂ, ಕೊಳ್ಳೆಯನ್ನು ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟುಬಿಟ್ಚರು.15ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ನಪಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು.16ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯ ಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.17ಏಕೆಂದರೆ ಎದೋಮ್ಯರು ಯೆಹೂದ್ಯರ ಮೇಲೆ ತಿರುಗಿ ಯುದ್ಧಕ್ಕೆ ಬಂದು ಅವರನ್ನು ಸೋಲಿಸಿ ಅನೇಕ ಜನರನ್ನು ಸೆರೆಯಾಗಿ ಒಯ್ದಿದ್ದರು.18ಫಿಲಿಷ್ಟಿಯರು ಯೆಹೂದದ ತಗ್ಗಾದ ಪ್ರದೇಶದ ಮತ್ತು ದಕ್ಷಿಣಪ್ರಾಂತ್ಯದ ಪಟ್ಟಣಗಳ ಮೇಲೆ ಬಿದ್ದು ಬೇತ್‌ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿವ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು.19ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರೇಪಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್ ರಾಜನಾದ ಆಹಾಜನ ನಿಮಿತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರವಾಗಿ ತಗ್ಗಿಸಿದನು.20ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.21ಆಹಾಜನು ಯೆಹೋವನ ಆಲಯದ ಅರಮನೆಯ ಪ್ರಭುಗಳ ಆಸ್ತಿಯನ್ನು ಸೂರೆಮಾಡಿಕೊಂಡು ಹೋಗಿ ಅಶ್ಶೂರದ ಅರಸನಿಗೆ ಕಾಣಿಕೆಯನ್ನಾಗಿ ಕೊಟ್ಟರೂ ಅವನಿಂದ ಏನೂ ಸಹಾಯವಾಗಲಿಲ್ಲ.22ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.23ಹೇಗೆಂದರೆ <<ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು>> ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು.24ಇದಲ್ಲದೆ, ಆಹಾಜನು ದೇವಾಲಯದ ಸಾಮಾನುಗಳನ್ನು ಒಟ್ಟುಗೂಡಿಸಿ ಅವುಗಳನ್ನು ಒಡೆದುಹಾಕಿದನು; ಯೆಹೋವನ ಆಲಯದ ಬಾಗಿಲುಗಳನ್ನು ಮುಚ್ಚಿ ಯೆರೂಸಲೇಮಿನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.25ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಯೆಹೂದದ ಎಲ್ಲಾ ಪಟ್ಟಣಗಳಲ್ಲಿಯೂ ಪೂಜಾಸ್ಥಳಗಳನ್ನು ಏರ್ಪಡಿಸಿದನು. ಹೀಗೆ ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ರೇಗಿಸಿದನು.26ಆಹಾಜನ ಉಳಿದ ಪೂರ್ವೋತ್ತರ ಚರಿತ್ರೆಯೂ ಮತ್ತು ಮಾಡಿದ ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.27ಆಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್ ರಾಜಸ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು, ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.
29ಯೆಹೂದದ ಅರಸನಾದ ಹಿಜ್ಕೀಯನು ದೇವಾಲಯವನ್ನು ಪುನಃ ಪ್ರತಿಷ್ಠಿಸಿದ್ದು
1ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.2ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.3ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.4ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ5ಅವರಿಗೆ, <<ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.6ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು.7ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.8ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.9ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ, ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು.10ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.11ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ>> ಎಂದು ಹೇಳಿದನು.12ಕೂಡಲೆ ಲೇವಿಯರು ಮುಂದೆ ಬಂದರು: ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್,13ಎಲೀಚಾಫಾನ್ಯರಲ್ಲಿ ಶಿಮ್ರಾ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ ಮತ್ತು ಮತ್ತನ್ಯ,14ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮೀ, ಯೆದೂತೂನ್ಯರಲ್ಲಿ ಶೆಮಾಯ ಹಾಗು ಉಜ್ಜೀಯೇಲ್,15ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು.16ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.17ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಆಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.18ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, <<ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.19ಅರಸನಾದ ಆಹಾಜನು ತನ್ನ ಆಳ್ವಿಕೆಯಲ್ಲಿ ದೈವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ತಿರುಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ>> ಎಂದರು.20ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.21ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.22ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿದ ಮೇಲೆ ಯಾಜಕರು, ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಪ್ರೋಕ್ಷಿಸಿದರು. ಆ ಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಪ್ರೋಕ್ಷಿಸಿದರು.23ಕಡೆಯಲ್ಲಿ ದೋಷಪರಿಹಾರಕ ಯಜ್ಞಕ್ಕಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಮತ್ತು ಸಮೂಹದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನಿಟ್ಟರು.24ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.25ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.26ಆ ಲೇವಿಯರು ದಾವೀದನ ವಾದ್ಯಗಳನ್ನೂ, ಯಾಜಕರೂ ತುತ್ತೂರಿಗಳನ್ನೂ ಹಿಡಿದು ನಿಂತಿದ್ದರು.27ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.28ಸರ್ವಾಂಗಹೋಮ ಸಮರ್ಪಣೆಯು ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು.29ಸರ್ವಾಂಗಹೋಮ ಸಮರ್ಪಣೆಯು ಮುಗಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.30ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.31ಆಮೇಲೆ ಹಿಜ್ಕೀಯನು ಸಮೂಹದವರಿಗೆ, <<ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ>> ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.32ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು.33ದೇವರಿಗೆ ಕಾಣಿಕೆಯಾಗಿ ಕೊಡಲ್ಪಟ್ಟ ಹಿಂಡುಗಳಲ್ಲಿ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ.34ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು .35ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.36ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಕೀಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.
30ಪಸ್ಕಾಚರಣೆಗೆ ಸಿದ್ಧತೆ
1ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.2ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು.3ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು.4ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ5ಅವರು, <<ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು>> ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.6ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: <<ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.7ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.8ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.9ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.>>ಪಸ್ಕ ಆಚರಣೆ
10ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.11ಕೆಲವು ಮಂದಿ ಆಶೇರ್ಯರೂ, ಮನಸ್ಸೆಯವರೂ, ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.12ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.13ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.14ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.15ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು.16ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.17ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.18ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, <<ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು>> ಎಂದು ವಿಜ್ಞಾಪನೆ ಮಾಡಿದನು.19ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.20ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು.21ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.22ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.23ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು24ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು.25ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು.26ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು.27ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.
31ಹಿಜ್ಕೀಯನು ಕೈಗೊಂಡ ಧಾರ್ಮಿಕ ಸುಧಾರಣೆಗಳು
1ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.2ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.3ಇದಲ್ಲದೆ, ಅರಸನು ಯೆಹೋವನ ಧರ್ಮಶಾಸ್ತ್ರದ ವಿಧಿಗನುಸಾರವಾಗಿ ಪ್ರಾತಃಕಾಲ, ಸಾಯಂಕಾಲ, ಸಬ್ಬತ್ ದಿನ, ಅಮಾವಾಸ್ಯೆ ಹಾಗು ಹಬ್ಬಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗಾಗಿ ಆಗಬೇಕಾದ ಎಲ್ಲವನ್ನು ತನ್ನ ಸ್ವಂತ ಆಸ್ತಿಯಿಂದಲೇ ಸಲ್ಲಿಸಬೇಕು ಎಂದು ಸೂಚಿಸಿದನು.4ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.5ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.6ಯೆಹೂದದ ಪಟ್ಟಣಗಳಲ್ಲಿ ವಾಸಿಸುತ್ತಿರುವ ಇಸ್ರಾಯೇಲರೂ ಯೆಹೂದ್ಯರೂ ಕುರಿದನ ಹಿಂಡುಗಳಲ್ಲಿ ದಶಮಾಂಶವನ್ನು ಕೊಟ್ಟದ್ದಲ್ಲದೆ, ದೇವರಾದ ಯೆಹೋವನಿಗೆ ಸಮರ್ಪಣೆಯಾಗತಕ್ಕ ಪರಿಶುದ್ಧ ದ್ರವ್ಯಗಳಲ್ಲಿಯೂ ದಶಮಾಂಶವನ್ನು ತಂದು ರಾಶಿಮಾಡಿದರು.7ಹೀಗೆ ರಾಶಿಮಾಡುವುದು ಮೂರನೆಯ ತಿಂಗಳಿಂದ ಪ್ರಾರಂಭವಾಯಿತು. ಏಳನೆಯ ತಿಂಗಳಲ್ಲಿ ಅದು ಮುಕ್ತಾಯಗೊಂಡಿತು ಅರಸನಾದ8ಹಿಜ್ಕೀಯನೂ ಮತ್ತು ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲರನ್ನು ಹರಸಿದರು.9ಹಿಜ್ಕೀಯನೂ ಯಾಜಕರ ಮತ್ತು ಲೇವಿಯರ ಹತ್ತಿರ ಆ ರಾಶಿಗಳ ವಿಷಯದಲ್ಲಿ ವಿಚಾರಿಸಿದಾಗ,10ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, <<ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ>> ಎಂದನು.11ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.12ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನೂ, ತಮ್ಮ ಆದಾಯದ ದಶಮಾಂಶವನ್ನೂ ಹಾಗು ದೇವರ ನೈವೇದ್ಯಕ್ಕಾಗಿ ಮುಡುಪಾಗಿ ಇಟ್ಟಿದ್ದನ್ನು ನಂಬಿಕೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಗೆ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮನಾದ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.13ಅರಸನಾದ ಹಿಜ್ಕೀಯನ ಮತ್ತು ಯೆಹೋವನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಂತೆ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮೀಯ ಕೈಕೆಳಗಿನ ಪಾರುಪತ್ಯಗಾರರಾಗಿದ್ದರು.14ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.15ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬುವವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ನಂಬಿಕೆಯಿಂದ ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ಭೇದಮಾಡದೆ ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.16ಆಯಾ ಉದ್ಯೋಗ ವರ್ಗಗಳಿಗನುಸಾರವಾಗಿ ಅನುದಿನದ ಸೇವೆಗಾಗಿ ಯೆಹೋವನ ಆಲಯಕ್ಕೆ ಬರುತ್ತಿದ್ದ ಗಂಡಸರಲ್ಲಿ ಮೂರು ವರ್ಷ ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರ ಪಟ್ಟಿಯಲ್ಲಿ ಬರೆಯಲ್ಪಟ್ಟವರಿಗೆ ಮಾತ್ರ ಕೊಡುತ್ತಿರಲಿಲ್ಲ.17ಆ ಪಟ್ಟಿಯಲ್ಲಿ ಗೋತ್ರಗಳಿಗೆ ಅನುಸಾರವಾಗಿಯೂ ಆಯಾ ಉದ್ಯೋಗ ವರ್ಗಗಳಿಗೆ ಅನುಸಾರವಾಗಿಯೂ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳ ಯಾಜಕರು, ಲೇವಿಯರು,18ಅವರವರ ಹೆಂಡತಿಯರು, ಗಂಡುಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನು ದೇವರಿಗೆ ನಂಬಿಕೆಯಿಂದ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.19ಇದಲ್ಲದೆ, ಆರೋನನ ಸಂತಾನದವರಾದ ಯಾಜಕರು ಆಯಾ ಪಟ್ಟಣಗಳಿಗೆ ಸೇರಿದ ಹುಲ್ಲುಗಾವಲುಗಳಲ್ಲಿದ್ದವರಿಗೆ ಪಾಲುಕೊಡುತ್ತಿದ್ದರು. ಇವರು ಯಾಜಕ ಸಂತಾನದ ಎಲ್ಲಾ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲಾ ಲೇವಿಯರಿಗೂ, ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರೆಸರಾಗಿ ನೇಮಿಸಲ್ಪಟ್ಟರೂ ಪುರುಷರಿದ್ದರು.20ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ, ನೀತಿವಂತನೂ, ನಂಬಿಗಸ್ತನೂ ಆಗಿ ನಡೆದನು.21ಅವನು ತನ್ನ ದೇವರ ಒಲುಮೆಯನ್ನು ಪಡೆದುಕೊಳ್ಳುವುದಕ್ಕಾಗಿ ದೇವಾಲಯದ ಸೇವೆ ಮಾಡುವ, ಕಾರ್ಯದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ, ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದಲೂ ಪ್ರಾಮಾಣಿಕನಾಗಿಯೂ ನಡೆದುಕೊಂಡು ಕೃತಾರ್ಥನಾದನು.
32ಅರಸನಾದ ಸನ್ಹೇರೀಬನು ಯೆರೂಸಲೇಮಿಗೆ ಬೆದರಿಕೆ ಹಾಕಿದ್ದು
1ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.2ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇಮಿನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವುದು ಹಿಜ್ಕೀಯನಿಗೆ ತಿಳಿದುಬಂದಿತು.3ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.4ಆಗ ಅನೇಕರು ಸೇರಿ, <<ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?>> ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.5ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.6ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ,7<<ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.8ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು>> ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.9ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು,10<<ಅಶ್ಶೂರದ ಅರಸನಾದ ಸನ್ಹೇರೀಬನು ಈ ರೀತಿಯಾಗಿ ಹೇಳುತ್ತಿದ್ದಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ನಿಂತಿದ್ದೀರಿ?11ಹಿಜ್ಕೀಯನು, <ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು> ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ.12ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?13ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ?14ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಯೋ15ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?>> ಎಂದು ಹೇಳಿಸಿದನು.16ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರುದ್ಧವಾಗಿ ಆಡಿದ ಈ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು.17ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, <<ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು>> ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.18ಯೆರೂಸಲೇಮಿಗೆ ಬಂದ ಆ ಅಶ್ಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ಭ್ರಮೆಗೊಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆ19ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.20ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.21ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.22ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇಮಿನವರನ್ನೂ ಅಶ್ಶೂರ್ಯದ ಅರಸನಾದ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.23ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.ಹಿಜ್ಕೀಯನ ರೋಗ ಮತ್ತು ಅಹಂಕಾರ
24ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.25ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.26ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.27ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು28ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು.ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.29ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.30ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.31ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು32ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.33ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.
33ಯೆಹೂದದ ಅರಸನಾದ ಮನಸ್ಸೆಯು
1ಮನಸ್ಸೆಯು ಅರಸನಾದಾಗ ಅವನು ಹನ್ನೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಐವತ್ತೈದು ವರ್ಷಗಳ ಕಾಲ ಆಳಿದನು.2ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.3ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.4ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ,5ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.6ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.7ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, <<ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.8ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪೂರ್ವಿಕರಿಗೆ ನೇಮಿಸಲ್ಟಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು>> ಎಂದು ಹೇಳಿದನು.9ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.10ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.11ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬೆಲೋನಿಗೆ ಒಯ್ದರು.12ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು13ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.14ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು.15ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.16ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.17ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನೂ ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.18ಮನಸ್ಸೆಯ ಉಳಿದ ಚರಿತ್ರೆಯೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ದರ್ಶಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳೂ ಇಸ್ರಾಯೇಲ್ ರಾಜರ ವೃತ್ತಾಂತಗಳಲ್ಲಿ ಬರೆಯಲ್ಪಟ್ಟಿವೆ.19ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.20ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು.ಯೆಹೂದದ ಅರಸನಾದ ಆಮೋನನು
21ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು.22ಆಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು.23ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.24ಅವನ ಸೇವಕರು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದು ಹಾಕಿದರು.25ಆದರೆ ದೇಶದ ಜನರು ಅರಸನಾದ ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.
34ಯೆಹೂದದ ಅರಸನಾದ ಯೋಷೀಯನು
1ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು.2ಅವನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು.3ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.4ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.5ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದ ಮತ್ತು ಯೆರೂಸಲೇಮನ್ನು ಶುದ್ಧಪಡಿಸಿದನು.6ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಸುತ್ತಣ ಊರುಗಳಲಿಯೂ ಬಯಲುಗಳಲ್ಲಿದ್ದ,7ಯಜ್ಞವೇದಿಗಳನ್ನು ಕೆಡವಿಸಿ ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಒಡೆದು ಪುಡಿಪುಡಿ ಮಾಡಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು.8ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ದೇಶವನ್ನೂ, ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವುದಕ್ಕಾಗಿ ಅಚಲ್ಯನ ಮಗನಾದ ಶಾಫಾನನನ್ನೂ ಪಟ್ಟಣದ ಅಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.9ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು10ಯೆಹೋವನ ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವುದಕ್ಕಾಗಿ ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು11ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ, ಯೆಹೂದ ರಾಜರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಹಾಕುವುದಕ್ಕಾಗಿಯೂ, ದೇವಾಲಯವನ್ನೂ ಜೀರ್ಣೋದ್ಧಾರಮಾಡಿ ಭದ್ರಪಡಿಸುವುದಕ್ಕೆ ಬಡಗಿಗಳಿಗೂ ಶಿಲ್ಪಿಗಳಿಗೂ ಕೊಟ್ಟರು.12ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.13ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡೆಸುತ್ತಿದ್ದರು; ಲೇವಿಯರಲ್ಲಿ ಕೆಲವರು ಲೇಖಕರೂ, ಕೆಲವರು ಅಧಿಕಾರಿಗಳೂ, ದ್ವಾರಪಾಲಕರೂ ಲೇವಿಯರೇ ಆಗಿದ್ದರು.ಧರ್ಮೋಪದೇಶ ಗ್ರಂಥವು ದೊರೆತದ್ದು
14ಯೆಹೋವನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶ ಗ್ರಂಥವು ಯಾಜಕನಾದ ಹಿಲ್ಕೀಯನಿಗೆ ಸಿಕ್ಕಿತು.15ಹಿಲ್ಕೀಯನು ಲೇಖಕನಾದ ಶಾಫಾನನಿಗೆ, <<ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ>> ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು.16ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, <<ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ.17ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಕೆಲಸ ಮಾಡಿಸುವವರಿಗೂ, ಮಾಡುವವರಿಗೂ ಒಪ್ಪಿಸಿದರು>> ಎಂದು ತಿಳಿಸಿದನು.18ಇದಲ್ಲದೆ, ಲೇಖಕನಾದ ಶಾಫಾನನು ಅರಸನಿಗೆ, <<ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ>> ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.19ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡನು.20ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಅರಸನ ಸಹಕಾರಿಯಾದ ಅಸಾಯ ಎಂಬುವವರಿಗೆ ಅಜ್ಞಾಪಿಸಿದೇನೆಂದರೆ,21<<ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು>> ಆಜ್ಞಾಪಿಸಿದನು.22ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.23ಹುಲ್ದಳು ಅವರಿಗೆ, ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ,24ಯೆಹೋವನು ಹೇಳಿದ್ದೇನೆಂದರೆ, <<ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;25ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ>> ಎನ್ನುತ್ತಾನೆ.26ತಾನು ಕೇಳಿದ ವಾಕ್ಯಗಳ ವಿಷಯವಾಗಿ, ಇಸ್ರಾಯೇಲ್ ದೇವರಾದ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ,27<<ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.28ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ>> ಎಂದು ಹೇಳಿದಳು.29ಅನಂತರ ಅರಸನು ದೂತರ ಮುಖಾಂತರ ಯೆರೂಸಲೇಮಿನ ಮತ್ತು ಯೆಹೂದದ ಎಲ್ಲಾ ಹಿರಿಯರನ್ನು ಒಟ್ಟಾಗಿ ಸೇರಿಸಿದನು.30ಅರಸನು ಯೆರೂಸಲೇಮಿನವರನ್ನೂ, ಬೇರೆ ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಲೇವಿಯರನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.31ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.32ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.33ಯೋಷೀಯನು ಇಸ್ರಾಯೇಲರಿಗೆ ಸೇರಿದ ಎಲ್ಲಾ ಪ್ರಾಂತ್ಯಗಳೊಳಗಿನ ಅಸಹ್ಯ ಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಾಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಆರಾಧಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.
35ಯೋಷೀಯನ ಕಾಲದಲ್ಲಿ ನಡೆದ ಪಸ್ಕಹಬ್ಬ
1ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇಮಿನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ಕೊಯ್ದರು.2ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ, ಯೆಹೋವನ ಆಲಯದ ಸೇವೆಗಾಗಿ ಅವರನ್ನು ಪ್ರೋತ್ಸಾಹಿಸಿದನು.3ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, <<ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.4ಇಸ್ರಾಯೇಲರ ಅರಸನಾದ ದಾವೀದನೂ, ಅವನ ಮಗನಾದ ಸೊಲೊಮೋನನೂ ಬರೆದು ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರವರ್ಗಗಳ ಪ್ರಕಾರ ಸಿದ್ಧರಾಗಿದ್ದು,5ನಿಮ್ಮ ಸಹೋದರರಾದ ಇಸ್ರಾಯೇಲರ ಒಂದೊಂದು ಗೋತ್ರಶಾಖೆಗಳಿಗಾಗಿ ನಿಮ್ಮಲ್ಲಿ ಒಂದೊಂದು ಗುಂಪಿನವರು ಪವಿತ್ರಸ್ಥಾನದಲ್ಲಿ ನಿಂತು ಪಸ್ಕದ ಕುರಿಯನ್ನು ವಧಿಸಲಿ6ಮೋಶೆಯಿಂದ ಪ್ರಕಟವಾದ ಯೆಹೋವನ ವಿಧಿಗನುಸಾರವಾಗಿ ನಿಮ್ಮ ಸಹೋದರರು ಪಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗಾಗಿ ಎಲ್ಲವನ್ನೂ ಸಿದ್ಧಮಾಡಿರಿ>> ಎಂದು ಆಜ್ಞಾಪಿಸಿದನು.7ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ, ಕುರಿಮರಿಗಳನ್ನೂ, ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.8ಅವನ ಸರದಾರರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಯಜ್ಞಪಶುಗಳನ್ನು ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ, ಮುನ್ನೂರು ಹೋರಿಗಳನ್ನೂ ಕೊಟ್ಟರು.9ಲೇವಿಯರಲ್ಲಿ ಮುಖ್ಯಸ್ಥರಾದ ಕೋನನ್ಯ, ಸೆಮಾಯ, ನೆತನೇಲ್ ಎಂಬ ಅಣ್ಣತಮ್ಮಂದಿರೂ, ಹಷಲ್ಯ, ಯೆಗೀಯೇಲ್, ಯೋಜಾಬಾದ್ ಎಂಬವರೂ ಲೇವಿಯರಿಗೆ ಐದು ಸಾವಿರ ಪಸ್ಕದ ಕುರಿಮರಿಗಳನ್ನೂ, ಐನೂರು ಹೋರಿಗಳನ್ನೂ ದಾನಮಾಡಿದರು.10ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು;11ಲೇವಿಯರು ಪಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು.12ಲೇವಿಯರು ಚರ್ಮ ಸುಲಿದು ಹೋಮಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಪ್ರತ್ಯೇಕಿಸಿ ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರವಾಗಿ ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಯೆಹೋವನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲಿಯೂ ಅದೇ ಕ್ರಮವನ್ನು ಅನುಸರಿಸಿದರು.13ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ, ಬಾನೆ, ಹಂಡೆಗಳಲ್ಲಿ ಬೇಯಿಸಿ, ಬೇಗನೆ ತಂದು ಜನರಿಗೆ ಬಡಿಸಿದರು.14ತರುವಾಯ ತಮಗೋಸ್ಕರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ಸರ್ವಾಂಗಹೋಮಗಳನ್ನೂ, ಕೊಬ್ಬನ್ನೂ ಸರ್ಮಪಿಸುತ್ತಾ ಇದ್ದುದರಿಂದ ಲೇವಿಯರು ತಮಗೋಸ್ಕರ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೋಸ್ಕರ ಭೋಜನ ಸಿದ್ಧಮಾಡಿದರು.15ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ.16ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವುದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವುದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿನವೇ ಸಿದ್ಧವಾಯಿತು.17ಕೂಡಿಬಂದಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕಹಬ್ಬವನ್ನೂ ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನೂ ಆಚರಿಸಿದರು.18ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿನಗಳಿಂದ ಇಸ್ರಾಯೇಲರಲ್ಲಿ ನಡೆಯಲೇ ಇಲ್ಲ. ಯೋಷೀಯನೂ, ಯಾಜಕರೂ, ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲರು, ಯೆಹೂದ್ಯರು, ಯೆರೂಸಲೇಮಿನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.19ಈ ಪಸ್ಕಹಬ್ಬವು ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಡೆಯಿತು.ಯೋಷೀಯನ ಮರಣ
20ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಐಗುಪ್ತದ ಅರಸನಾದ ನೆಕೋ ಎಂಬುವವನು ಯುದ್ಧಮಾಡುವುದಕ್ಕೋಸ್ಕರ ಯೂಫ್ರೆಟಿಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಹೋದನು.21ಯೋಷೀಯನು ಅವನಿಗೆ ವಿರುದ್ಧವಾಗಿ ಹೊರಡಲು ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ, <<ಯೆಹೂದದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟದ್ದು ನಿನಗೆ ವಿರುದ್ಧವಾಗಿ ಅಲ್ಲ. ನನ್ನ ಶತ್ರುವಂಶಕ್ಕೆ ವಿರುದ್ಧವಾಗಿ, ನಾನು ಮುನ್ನುಗ್ಗಬೇಕೆಂದು ದೇವರ ಅಪ್ಪಣೆಯಾಗಿದೆ. ನನ್ನೊಂದಿಗಿರುವ ದೇವರಿಗೆ ವಿರುದ್ಧ ಕೈಯೆತ್ತುವುದನ್ನು ಬಿಡು. ಇಲ್ಲವಾದರೆ ಆತನು ನಿನ್ನನ್ನು ನಾಶಮಾಡುವನು>> ಎಂದು ಹೇಳಿಸಿದನು.22ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೈವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.23ಅಲ್ಲಿ ಬಿಲ್ಲುಗಾರರು ಅರಸನಾದ ಯೋಷೀಯನಿಗೆ ಬಾಣವನ್ನೆಸೆದಾಗ ಅವನು ತನ್ನ ಸೇವಕರಿಗೆ, <<ನನಗೆ ದೊಡ್ಡ ಗಾಯವಾಯಿತು, ನನ್ನನ್ನು ಆಚೆಗೆ ತೆಗೆದುಕೊಂಡು ಹೋಗಿರಿ>> ಎಂದನು.24ಸೇವಕರು ಅವನನ್ನು ಯುದ್ಧರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇಮಿಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.25ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ.26ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರ ಅನುಸಾರವಾದ ಅವನ ಭಕ್ತಿಕಾರ್ಯಗಳೂ,27ಅವನ ಪೂರ್ವೋತ್ತರ ವೃತ್ತಾಂತವೂ ಇಸ್ರಾಯೇಲರ ಮತ್ತು ಯೆಹೂದ್ಯ ರಾಜರ ಗ್ರಂಥದಲ್ಲಿ ಬರೆದಿರುತ್ತವೆ.
36ಯೆಹೂದದ ಅರಸನಾದ ಯೆಹೋವಾಹಾಜನು
1ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.2ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.3ಐಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.4ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು.ಯೆಹೂದದ ಅರಸನಾದ ಯೆಹೋಯಾಕೀಮನು
5ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.6ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬೆಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,7ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.8ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು.ಯೆಹೂದದ ಅರಸನಾದ ಯೆಹೋಯಾಕೀನನು
9ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.10ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬೆಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.ಯೆಹೂದದ ಅರಸನಾದ ಚಿದ್ಕೀಯನು
11ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.12ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.13ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.14ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.ಯೆರೂಸಲೇಮಿನ ಪತನ
15ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.16ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.17ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.18ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬೆಲೋನಿಗೆ ಒಯ್ದನು.19ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.20ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬೆಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.21ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.ಕೋರೆಷನ ಪ್ರಕಟಣೆ
22ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,23ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, <<ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು>> ಎಂದು ಪ್ರಕಟಿಸಿದನು.
ಎಜ್ರನು
1ಅರಸನಾದ ಕೋರೆಷನು ಯೆಹೂದ್ಯರಿಗೆ ಸ್ವದೇಶಕ್ಕೆ ಹಿಂತಿರುಗಲು ಅಪ್ಪಣೆಕೊಟ್ಟದ್ದು
1ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.2ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, <<ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.3ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.4ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ>> ಎಂದು ಪ್ರಕಟಿಸಿದನು.5ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.6ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.7ಅಲ್ಲಿಂದ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಕೊಳ್ಳೆಯಾಗಿ ತಂದು ತನ್ನ ದೇವರ ಗುಡಿಯಲ್ಲಿ ಇಟ್ಟಿದ್ದ ಯೆಹೋವನ ಆಲಯದ ಸಾಮಾನುಗಳನ್ನು ಪರ್ಷಿಯ ರಾಜನಾದ ಕೋರೆಷನು ಅಲ್ಲಿಂದ ತೆಗೆಸಿದನು.8ಅವನು ಅವುಗಳನ್ನು ಖಜಾನೆಯ ಅಧಿಕಾರಿಯಾದ ಮಿತ್ರದಾತನಿಗೆ ಒಪ್ಪಿಸಿದನು. ಇವನು ಅವುಗಳನ್ನು ಯೆಹೂದದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕಮಾಡಿ ಕೊಟ್ಟನು.9ಆ ಸಾಮಾನುಗಳ ಲೆಕ್ಕ: ಬಂಗಾರದ ಬೋಗುಣಿಗಳು ಮೂವತ್ತು; ಬೆಳ್ಳಿಯ ಬೋಗುಣಿಗಳು ಒಂದು ಸಾವಿರ; ಕತ್ತಿಗಳು ಇಪ್ಪತ್ತೊಂಭತ್ತು;10ಚಿನ್ನದ ಬಟ್ಟಲುಗಳು ಮೂವತ್ತು; ಎರಡನೆಯ ದರ್ಜೆಯ ಬೆಳ್ಳಿಯ ಬಟ್ಟಲುಗಳು ನಾನೂರಹತ್ತು ಮತ್ತು ಇತರ ಪಾತ್ರೆಗಳು ಒಂದು ಸಾವಿರ.11ಬೆಳ್ಳಿಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬೆಲೋನಿನಿಂದ ಯೆರೂಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು.
2ಸೆರೆಯಿಂದ ಹಿಂತಿರುಗಿ ಬಂದವರ ಪಟ್ಟಿ
1ಬಾಬೆಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬೆಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ [ಯೆಹೂದ] ಸಂಸ್ಥಾನದವರ ಜನಗಣತಿ.2ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:3ಪರೋಷಿನವರು 2,1724ಶೆಫಟ್ಯನವರು 3725ಆರಹನವರು 7756ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2,8127ಏಲಾಮಿನವರು 1,2548ಜತ್ತೂವಿನವರು 9459ಜಕ್ಕೈಯವರು 76010ಬಾನೀಯವರು 64211ಬೇಬೈಯವರು 62312ಅಜ್ಗಾದಿನವರು 1,22213ಅದೋನೀಕಾಮಿನವರು 66614ಬಿಗ್ವೈಯವರು 2,05615ಆದೀನನವರು 45416ಆಟೇರಿನವರಾದ ಹಿಜ್ಕೀಯನ ಸಂತಾನದವರು 9817ಬೇಚೈಯವರು 32318ಯೋರನವರು 11219ಹಾಷುಮಿನವರು 22320ಗಿಬ್ಬಾರಿನವರು 9521ಬೇತ್ಲೆಹೇಮಿನವರು 12322ನೆಟೋಫ ಊರಿನವರು 5623ಅನಾತೋತ್ ಊರಿನವರು 12824ಅಜ್ಮಾವೆತಿನವರು 4225ಕಿರ್ಯತ್ಯಾರೀಮ್, ಕೆಫೀರ ಮತ್ತು ಬೇರೋತ್ ಊರುಗಳವರು 74326ರಾಮಾ ಮತ್ತು ಗೆಬ ಊರುಗಳವರು 62127ಮಿಕ್ಮಾಸಿನವರು 12228ಬೇತೇಲ್ ಮತ್ತು ಆಯಿ ಎಂಬ ಊರುಗಳವರು 22329ನೆಬೋವಿನವರು 5230ಮಗ್ಬೀಷಿನವರು 15631ಬೇರೆ ಏಲಾಮಿನವರು 1,25432ಹಾರಿಮನವರು 32033ಲೋದ್, ಹಾದೀದ್ ಮತ್ತು ಓನೋ ಎಂಬ ಊರುಗಳವರು 72534ಯೆರಿಕೋವಿನವರು 34535ಸೆನಾಹನವರು 3,63036ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು 97337ಇಮ್ಮೇರನವರು 1,05238ಪಷ್ಹೂರನವರು 1,24739ಹಾರಿಮನವರು 1,01740ಲೇವಿಯರಲ್ಲಿ: ಹೋದವ್ಯನವರಾದ ಯೇಷೂವ ಮತ್ತು ಕದ್ಮೀಯೇಲ್ ಇವರ ಸಂತಾನದವರು 7441ಗಾಯಕರಲ್ಲಿ: ಆಸಾಫ್ಯರು 12842ದ್ವಾರಪಾಲಕರ ಸಂತಾನದವರು: ಶಲ್ಲೂಮ್ ಸಂತಾನದವರು, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ ಮತ್ತು ಶೋಬೈ ಇವರು ಒಟ್ಟು 139.43ದೇವಸ್ಥಾನದಾಸರಲ್ಲಿ: ಜೀಹ ಸಂತಾನದವರು ಮತ್ತು ಹಸೂಫ, ಟಬ್ಬಾವೋತ್,44ಕೇರೋಸ್, ಸೀಯಹಾ, ಪಾದೋನ್,45ಲೆಬಾನ, ಹಗಾಬ, ಅಕ್ಕೂಬ್,46ಹಾಗಾಬ, ಶಮ್ಲೈ, ಮತ್ತು ಹಾನಾನ್,47ಗಿದ್ದೇಲನ ಸಂತಾನದವರು, ಗಹರ್, ರೆವಾಯ,48ರೆಚೀನ್, ನೆಕೋದ, ಗಜ್ಜಾಮ್,49ಉಜ್ಜ, ಪಾಸೇಹ, ಬೇಸೈ,50ಅಸ್ನ, ಮೆಗೂನೀಮ್ ಮತ್ತು ನೆಫೀಸೀಮ್,51ಬಕ್ಬೂಕ್ ಸಂತಾನದವರು, ಹಕ್ಕೂಫ, ಹರ್ಹೂರ್,52ಬಚ್ಲೂತ್, ಮೆಹೀದ, ಹರ್ಷ,53ಬರ್ಕೋಸ್, ಸೀಸೆರ, ತೆಮಹ,54ನೆಚೀಹ ಮತ್ತು ಹಟೀಫ.55ಸೊಲೊಮೋನನ ದಾಸರ ಸಂತಾನದವರು; ಸೋಟೈ ಸಂತಾನದವರು, ಹಸ್ಲೋಫೆರೆತ್, ಪೆರೂದ,56ಯಾಲ, ದರ್ಕೋನ್ ಗಿದ್ದೇಲ್,57ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್ ಮತ್ತು ಆಮಿ.58ಎಲ್ಲಾ ಸಂತಾನದವರನ್ನು ದೇವಸ್ಥಾನದ ಸೇವೆಗಾಗಿ ನೇಮಿಸಿದರು ಮತ್ತು ಸೊಲೊಮೋನನ ದಾಸರೂ ಒಟ್ಟು 392.59ಉಳಿದ ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿದರು.60ಆದರೂ ತಾವು ಇಸ್ರಾಯೇಲರೆಂಬುದನ್ನು ಸ್ಥಾಪಿಸಿಲಾರದವರಾದ ದೆಲಾಯ, ಟೋಬೀಯ ಮತ್ತು ನೆಕೋದ ಇವರ ಸಂತಾನದವರು 652.61ಯಾಜಕರಲ್ಲಿ: ಹಬಯ್ಯ, ಹಕ್ಕೋಜ್ ಮತ್ತು ಬರ್ಜಿಲ್ಲೈ ಇವರ ಸಂತಾನದವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)62ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕೋದ್ಯೋಗದಿಂದ ತಿರಸ್ಕರಿಸಲ್ಪಟ್ಟರು.63ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ತೀರ್ಪುಮಾಡಿದನು.64ಸರ್ವಸಮೂಹದವರ ಒಟ್ಟು ಸಂಖ್ಯೆಯು ನಲ್ವತ್ತೆರಡು ಸಾವಿರದ ಮುನ್ನೂರ ಆರವತ್ತು.65ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ದಾಸದಾಸಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಜನರು. ಅವರಲ್ಲಿ ಗಾಯಕರೂ, ಗಾಯಕಿಯರೂ ಇನ್ನೂರು ಜನರು ಇದ್ದರು.66ಅವರಿಗೆ ಏಳು ನೂರ ಮೂವತ್ತಾರು ಕುದುರೆಗಳೂ, ಇನ್ನೂರ ನಲ್ವತ್ತೈದು ಹೇಸರಗತ್ತೆಗಳೂ,67ನಾನೂರ ಮೂವತ್ತೈದು ಒಂಟೆಗಳೂ, ಆರು ಸಾವಿರದ ಏಳು ನೂರ ಇಪ್ಪತ್ತು ಕತ್ತೆಗಳೂ ಇದ್ದವು.68ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇಮಿನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟುವುದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.69ಅವರು ತಮ್ಮ ಸಾಮರ್ಥ್ಯಕ್ಕನುಸಾರವಾಗಿ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ ಮತ್ತು ನೂರು ಯಾಜಕವಸ್ತ್ರಗಳು.70ದೇವಸ್ಥಾನದ ಸೇವೆಗಾಗಿ ಇದ್ದ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಮತ್ತು ಸಾಧಾರಣಜನರಲ್ಲಿ ಕೆಲವರು ಅವರವರಿಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು; ಬೇರೆ ಎಲ್ಲಾ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸಿದರು.
3ಇಸ್ರಾಯೇಲರು ಯಜ್ಞವೇದಿಯನ್ನು ಕಟ್ಟಿದ್ದು
1ಸೆರೆವಾಸದಿಂದ ಹಿಂದಿರುಗಿ ಬಂದು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.2ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.3ಅವರು ಸುತ್ತಣ ಪ್ರಾಂತ್ಯಗಳ ಜನರಿಗೆ ಹೆದರಿಕೊಂಡಿದ್ದರಿಂದ ವೇದಿಯನ್ನು ಅದರ ಸ್ಥಳದಲ್ಲಿ ಕಟ್ಟಿ, ಅದರ ಮೇಲೆ ಯೆಹೋವನಿಗೋಸ್ಕರ ಮುಂಜಾನೆಯ ಹಾಗು ಸಾಯಂಕಾಲಗಳ ಸರ್ವಾಂಗಹೋಮಗಳನ್ನು ಅರ್ಪಿಸಿದರು.4ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ, ಪ್ರತಿದಿನ ನಿಗದಿಪಡಿಸಿದ ವಿಧಿಗನುಸಾರವಾದ ಸರ್ವಾಂಗಹೋಮಗಳನ್ನು ಅರ್ಪಿಸಿದರು.5ಅಂದಿನಿಂದ ನಿತ್ಯ ಸರ್ವಾಂಗಹೋಮ, ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ, ಜನರು ಸ್ವ ಇಚ್ಛೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.6ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸತೊಡಗಿದರು. ಆಗ ಯೆಹೋವನ ಆಲಯದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.ದೇವಾಲಯದ ಕಟ್ಟಡಕೆಲಸ ಆರಂಭ
7ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.8ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.9ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು ಅವನ ಮಕ್ಕಳು ಮತ್ತು ಸಹೋದರರು, ಕದ್ಮೀಯೇಲನು ಮತ್ತು ಅವನ ಮಕ್ಕಳು, ಹೇನಾದಾದನ ಮಕ್ಕಳು ಅವರ ಮಕ್ಕಳು ಮತ್ತು ಬಂಧುಗಳು ಇವರೆಲ್ಲರೂ ಕೂಡಿಕೊಂಡು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು.10ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲರ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಸ್ತುತಿಸಿ ಕೀರ್ತಿಸುವುದಕ್ಕೋಸ್ಕರ ಯಾಜಕರು ತಮ್ಮ ದೀಕ್ಷಾವಸ್ತ್ರಗಳಿಂದ ಭೂಷಿತರಾಗಿ ತುತ್ತೂರಿಗಳೊಡನೆಯೂ, ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡರು.11ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, <<ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ>> ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.12ಆದರೆ ಯಾಜಕರಲ್ಲಿಯೂ, ಲೇವಿಯರಲ್ಲಿಯೂ, ಗೋತ್ರಪ್ರಧಾನರಲ್ಲಿಯೂ ಅನೇಕರು ಅಂದರೆ ಮೊದಲಿನ ದೇವಾಲಯವನ್ನು ನೋಡಿದ್ದ ಹಿರಿಯರು ತಮ್ಮ ಕಣ್ಣ ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಟ್ಟಿದ್ದನ್ನು ನೋಡಿದಾಗ ಬಹಳವಾಗಿ ಅತ್ತರು. ಬೇರೆ ಹಲವರು ಹರ್ಷಧ್ವನಿಯಿಂದ ಜಯಘೋಷ ಮಾಡಿದರು.13ಜನರು ಮಹಾಧ್ವನಿಯಿಂದ ಅರ್ಭಟಿಸುತ್ತಿದ್ದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಗೊತ್ತಾಗಲಿಲ್ಲ. ಗದ್ದಲವು ಬಹುದೂರದ ವರೆಗೂ ಕೇಳಿಸಿತು.
4ದೇವಾಲಯ ಕಟ್ಟುವುದಕ್ಕೆ ಸಮಾರ್ಯರು ಅಡ್ಡಿಮಾಡಿದ್ದು
1ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು.2ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, <<ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ>> ಎಂದು ಹೇಳಿದರು.3ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, <<ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ>> ಎಂದು ಉತ್ತರ ಕೊಟ್ಟರು.4ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.5ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು.ಯೆರೂಸಲೇಮ್ ಪಟ್ಟಣದ ಪುನರ್ನಿರ್ಮಾಣಕ್ಕೆ ಅಡ್ದಿ
6ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು.7ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು.8 ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರು ಯೆರೂಸಲೇಮಿಗೆ ವಿರುದ್ಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು.9ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬೆಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು.10ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ.11ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, <<ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.12ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.13ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.14ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.15ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.16ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬುದೇ.>>17ಅರಸನು ಅವರಿಗೆ ಕೊಟ್ಟ ಉತ್ತರವು, <<ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.18ನೀವು ಕಳುಹಿಸಿದ ಪತ್ರವು ನನ್ನ ಮುಂದೆ ಓದಲಾಯಿತು. ಅದರ ಸಂಪೂರ್ಣ ವಿಷಯ ಮನದಟ್ಟಾಯಿತು.19ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು.20ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.21ಆದುದರಿಂದ ಆ ಮನುಷ್ಯರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವ ವರೆಗೆ ಆ ಪಟ್ಟಣವನ್ನು ಕಟ್ಟಲು ಆವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.22ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ>> ಎಂದು ತಿಳಿಸಿದನು.23ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.24ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.
5ದೇವಾಲಯ ಕಟ್ಟುವುದಕ್ಕೆ ಪುನಃ ಪ್ರಾರಂಭಿಸಿದ್ದು
1ಪ್ರವಾದಿಗಳಾದ ಹಗ್ಗಾಯನೂ ಮತ್ತು ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್ ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ಯೆಹೂದ್ಯರಿಗೆ ದೇವಾಲಯ ಕಟ್ಟಿಸುವ ಬಗ್ಗೆ ಪ್ರವಾದಿಸಿದರು.2ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.3ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ತಮ್ಮ ಜೊತೆಗಾರರೊಂದಿಗೆ ಅವರ ಬಳಿಗೆ ಬಂದು.4ಅವರು, <<ಈ ಅಸ್ತಿವಾರವನ್ನು ಸರಿಪಡಿಸಿ, ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?>> ಎಂದು ಕೇಳಿದರು ಮತ್ತು ಈ ಕಟ್ಟಡವನ್ನು ಕಟ್ಟಿಸುತ್ತಿರುವವರ ಹೆಸರುಗಳು ಯಾವುವೆಂದು ವಿಚಾರಿಸಿದರು.5ಆದರೆ ಯೆಹೂದ್ಯರು ಮತ್ತು ಹಿರಿಯರೊಂದಿಗೆ ದೇವರ ಕೃಪಾಕಟಾಕ್ಷ ಇದ್ದುದರಿಂದ ವಿಚಾರಿಸುವುದಕ್ಕೆ ಬಂದವರು ಅವರಿಗೆ ಅಡ್ಡಿಮಾಡದೆ, ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ವರ್ತಮಾನ ಮುಟ್ಟಿಸಿ, ಉತ್ತರವನ್ನು ಬರೆದು ಕಳುಹಿಸುವೆವೆಂದು ಹೇಳಿ ಹೊರಟು ಹೋದರು.ತತ್ತೆನೈಯೂ ದಾರ್ಯಾವೆಷನಿಗೆ ಕಳುಹಿಸಿದ ಪತ್ರ
6ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.7ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶವೇನೆಂದರೆ, <<ದಾರ್ಯಾವೆಷ್ ರಾಜರಿಗೆ ಹೃತ್ಪೂರ್ವಕ ನಮಸ್ಕಾರಗಳು, ತಮ್ಮ ಕ್ಷೇಮ ಅಪೇಕ್ಷಿಸುತ್ತೇವೆ.8ನಾವು ಯೆಹೂದ ಸೀಮೆಗೆ ಹೋಗಿ ಮಹೋನ್ನತನಾದ ದೇವರ ಆಲಯವನ್ನು ನೋಡಿ ಬಂದೆವು ಎಂದು ತಮಗೆ ತಿಳಿಸಲು ಇಚ್ಛಿಸುತ್ತೇನೆ. ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ, ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ, ವಿಶೇಷ ಶ್ರಮದಿಂದ ವೇಗವಾಗಿ ನಡೆಯುತ್ತಿದೆ.9<<ಅಲ್ಲಿನ ಹಿರಿಯರ ಹತ್ತಿರ, <ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು> ಎಂದು ವಿಚಾರಮಾಡಿದೆವು.10ಅವರಲ್ಲಿ ಪ್ರಧಾನರಾದವರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕೋಸ್ಕರ ಅವರ ಹೆಸರುಗಳನ್ನು ಕೇಳಿದೆವು.11ಅವರು ನಮಗೆ, <ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ಪುನಃ ಕಟ್ಟುತ್ತಿದ್ದೇವೆ. ಇಸ್ರಾಯೇಲರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿದ್ದನು.12ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬೆಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬೆಲೋನಿಗೆ ಒಯ್ದನು.13ಆದರೆ ಬಾಬೆಲೋನಿನ ಅರಸನಾದ ಕೋರೆಷನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅಪ್ಪಣೆಕೊಟ್ಟನು.14ಅದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ತೆಗೆದುಕೊಂಡುಹೋಗಿ, ಬಾಬೆಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇಮಿಸಿದ ಶೆಷ್ಬಚ್ಚರನಿಗೆ ಒಪ್ಪಿಸಿದನು.15ಅವನು, <<ಈ ಸಾಮಾನುಗಳನ್ನು ಯೆರೂಸಲೇಮಿನ ದೇವಾಲಯದಲ್ಲಿ ಇಡುವುದಕ್ಕೋಸ್ಕರ ತೆಗೆದುಕೊಂಡುಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು>> ಎಂದು ಆಜ್ಞಾಪಿಸಿದನು.16ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿಸಿದನು. ಅಂದಿನಿಂದ ಇಂದಿನ ವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ಮುಗಿದಿರುವುದಿಲ್ಲ> ಎಂಬುದಾಗಿ ಉತ್ತರಕೊಟ್ಟರು.17<<ಅರಸರಿಗೆ ಸರಿತೋರುವುದಾದರೆ ಯೆರೂಸಲೇಮಿನ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅರಸನಾದ ಕೋರೆಷನಿಂದ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ವಿಷಯವಾಗಿ ಬಾಬೆಲೋನಿನ ರಾಜಭಂಡಾರದಲ್ಲಿ ಹುಡುಕಿ ನೋಡಲಿ ಮತ್ತು ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ>> ಎಂದು ಉತ್ತರಕೊಟ್ಟನು.
6ದಾರ್ಯಾವೆಷನ ರಾಜಾಜ್ಞೆ
1ಅರಸನಾದ ದಾರ್ಯಾವೆಷನು ಬಾಬೆಲೋನಿನ ಗ್ರಂಥಸಂಗ್ರಹವಾಗಿದ್ದ ಬಾಬೆಲೋನಿನ ಭಂಡಾರದಲ್ಲಿ ರಾಜಾಜ್ಞೆಯನ್ನು ಹುಡುಕುವುದಕ್ಕೆ ಆಜ್ಞೆಯನ್ನು ಹೊರಡಿಸಿದನು.2ಅವರು ಹುಡುಕಿದಾಗ ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು.3ಅದರಲ್ಲಿ, <<ಅರಸನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನ ದೇವಾಲಯದ ವಿಷಯವಾಗಿ ಕೊಟ್ಟ ಅಪ್ಪಣೆ, <ಬಲವಾದ ಅಸ್ತಿವಾರವನ್ನು ಹಾಕಿ, ಯಜ್ಞಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವು, ಅಗಲ ಅರುವತ್ತು ಮೊಳವು ಇರಬೇಕು.4ದೊಡ್ಡ ಕಲ್ಲುಗಳ ಮೂರು ಸಾಲುಗಳಾದ ಮೇಲೆ ಹೊಸ ಮರದ ಒಂದು ಸಾಲನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವುದು.5ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ಬಾಬೆಲೋನಿಗೆ ತೆಗೆದುಕೊಂಡು ಹೋದ ಬೆಳ್ಳಿ, ಬಂಗಾರದ ದೇವಸ್ಥಾನ ಪಾತ್ರೆಗಳನ್ನು ಹಿಂತಿರುಗಿ ಕೊಡಬೇಕು. ಅವುಗಳನ್ನೆಲ್ಲಾ ಮೊದಲಿದ್ದ ಸ್ಥಳಕ್ಕೆ ಅಂದರೆ ಯೆರೂಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು> ಎಂಬುದಾಗಿ ಬರೆದಿತ್ತು.6<<ಆಗ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, ಹೊಳೆಯಾಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈ, ಶೆತರ್ಬೋಜೆನೈ, ಹೊಳೆಯಾಚೆಯಲ್ಲಿ ಇವರು ಜೊತೆಗಾರರಾದ ಅಪರ್ಸತ್ಕಾಯರು ಇವರಿಗೆ, ನೀವು ಅವರ ಗೊಡವೆಗೆ ಹೋಗಬೇಡಿರಿ.7ಆ ದೇವಾಲಯವನ್ನು ಕಟ್ಟುವ ಕೆಲಸಕ್ಕೆ ಅಡ್ಡಿ ಮಾಡಬೇಡಿರಿ. ಯೆಹೂದ ದೇಶಾಧಿಪತಿಯು, ಯೆಹೂದ್ಯರ ಹಿರಿಯರು ಇವರೇ ಅದನ್ನು ಅದರ ಸ್ಥಳದಲ್ಲಿ ಕಟ್ಟಲಿ.8ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತ್ಯಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕು.9ಅವರು ಪರಲೋಕದೇವರ ಸರ್ವಾಂಗಹೋಮಗಳಿಗೋಸ್ಕರ ಬೇಕಾದ ಹೋರಿ, ಟಗರು, ಕುರಿಮರಿಗಳನ್ನೂ, ಗೋದಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ಯೆರೂಸಲೇಮಿನ ಯಾಜಕರು ಹೇಳುವ ಪ್ರಕಾರ ಪ್ರತಿದಿನವೂ ತಪ್ಪದೆ ಒದಗಿಸಿ ಕೊಡಬೇಕು ಎಂಬುದಾಗಿಯೂ ಆಜ್ಞಾಪಿಸುತ್ತೇನೆ.10ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.11ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು, ಅದನ್ನು ಶೂಲವನ್ನಾಗಿ ಮಾಡಿ, ಅದರ ಮೇಲೆ ಅವನನ್ನು ಏರಿಸಬೇಕು ಮತ್ತು ಅ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದು ಆಜ್ಞಾಪಿಸಿದ್ದೇನೆ.12ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು>> ಎಂದು ತಿಳಿಸಿದನು.ದೇವಾಲಯದ ಪ್ರತಿಷ್ಠೆ
13ಅರಸನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟಿದ್ದರಿಂದ ಹೊಳೆಯ ಈಚೆಯ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಮತ್ತು ಅವರ ಜೊತೆಗಾರರೂ ಜಾಗರೂಕರಾಗಿ ಅದನ್ನು ಅನುಸರಿಸಿದರು.14ಯೆಹೂದ್ಯರ ಹಿರಿಯರು, ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರವಾದನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪರ್ಷಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.15ಅರಸನಾದ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಕಟ್ಟಿ ಪೂರೈಸಿದರು.16ಯಾಜಕರೂ, ಲೇವಿಯರೂ ಮತ್ತು ಸೆರೆಯಿಂದ ಹಿಂತಿರುಗಿ ಬಂದ ಬೇರೆ ಇಸ್ರಾಯೇಲರೂ ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು.17ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ, ಇಸ್ರಾಯೇಲರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.18ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು.19ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕವನ್ನು ಆಚರಿಸಿದರು.20ಯಾಜಕರೂ ಮತ್ತು ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧವಾದನಂತರ ಲೇವಿಯರು ದೇಶಾಂತರದಿಂದ ಹಿಂದಿರುಗಿ ಬಂದವರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಗಳನ್ನು ವಧಿಸಿದರು.21ದೇಶಾಂತರದಿಂದ ಬಂದ ಇಸ್ರಾಯೇಲರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವುದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು, ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕಭೋಜನಮಾಡಿದರು.22ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.
7ಎಜ್ರನು ಯೆರೂಸಲೇಮಿಗೆ ಬಂದದ್ದು
1ಇದಾದ ಮೇಲೆ ಪರ್ಷಿಯ ರಾಜನಾದ ಅರ್ತಷಸ್ತನ ಆಳ್ವಿಕೆಯಲ್ಲಿ ಎಜ್ರನು ಬಾಬೆಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರೆಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ.2ಹಿಲ್ಕೀಯನು ಶಲ್ಲೂಮನ ಮಗ; ಇವನು ಚಾದೋಕನ ಮಗ; ಇವನು ಅಹೀಟೂಬನ ಮಗ; ಇವನು ಅಮರ್ಯನ ಮಗ.3ಅಮರ್ಯನು ಅಜರ್ಯನ ಮಗ; ಇವನು ಮೆರಾಯೋತನ ಮಗ.4ಮೆರಾಯೋತನು ಜೆರಹ್ಯನ ಮಗ; ಇವನು ಉಜ್ಜೀಯ ಮಗ; ಇವನು ಬುಕ್ಕೀಯ ಮಗ.5ಬುಕ್ಕೀಯನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋನನ ಮಗ.6ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.7ಅವನೊಡನೆ ಕೆಲವು ಜನರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಗಾಯಕರೂ, ದ್ವಾರಪಾಲಕರೂ ಮತ್ತು ದೇವಸ್ಥಾನದಾಸರೂ ಅರ್ತಷಸ್ತ ಅರಸನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಬಂದರು.8ಎಜ್ರನು ಆ ಅರಸನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಯೆರೂಸಲೇಮನ್ನು ತಲುಪಿದನು.9ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬೆಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು.10ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.ಅರ್ತಷಸ್ತನು ಎಜ್ರನಿಗೆ ಕೊಟ್ಟ ಪತ್ರ
11ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ.12<<ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ತಿಳಿಸುವುದೇನೆಂದರೆ,13ನನ್ನ ರಾಜ್ಯದಲ್ಲಿರುವ ಇಸ್ರಾಯೇಲರು ತಮ್ಮ ಯಾಜಕರು ಮತ್ತು ಲೇವಿಯರು ಹಾಗು ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸುಳ್ಳವರೆಲ್ಲರೂ ನಿನ್ನ ಸಂಗಡ ಹೋಗಬಹುದೆಂದು ಅಪ್ಪಣೆ ಕೊಡುತ್ತಿದ್ದೇನೆ.14ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಬೇಕು.15ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೊಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರ,16ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, ಇಸ್ರಾಯೇಲ್ ಸಾಧಾರಣಜನರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವ ಇಚ್ಛೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಜನ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.17ನೀನು ಈ ಹಣದಿಂದ ಹೋರಿ, ಟಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.18ಉಳಿದ ಬೆಳ್ಳಿಬಂಗಾರವನ್ನು, ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚಮಾಡಿರಿ.19ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಾನುಗಳನ್ನು ಯೆರೂಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.20ನಿನ್ನ ದೇವರ ಆಲಯಕ್ಕೋಸ್ಕರ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.21<<ಅರ್ತಷಸ್ತ ರಾಜನಾದ ನಾನು ಹೊಳೆಯಾಚೆಯ ಪ್ರಾಂತ್ಯಗಳ ಭಂಡಾರಗಳ ಮುಖ್ಯಸ್ಥರಿಗೆ ಆಜ್ಞಾಪಿಸುವುದು ಏನೆಂದರೆ, <ಯಾಜಕರೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.22ನೂರು ತಲಾಂತು ಬೆಳ್ಳಿ , ನೂರು ಕೋರ್ ಗೋದಿ ನೂರು ಬತ್ ದ್ರಾಕ್ಷಾರಸ , ಎಣ್ಣೆ ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.23ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೈವಕೋಪ ಉಂಟಾಗದ ಹಾಗೆ ನೀವು ಪರಲೋಕದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿ ಕೊಡಬೇಕು.24ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.>25<<ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.26ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು>> ಎಂಬುದು ನಿಮಗೆ ತಿಳಿದಿರಲಿ.ಎಜ್ರನು ಯೆಹೋವನನ್ನು ಸ್ತುತಿಸಿದ್ದು
27ಎಜ್ರನು ನೀಡಿದ ಪ್ರತಿಕ್ರಿಯೆ, <<ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.28ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು>> ಎಂದು ಹೇಳಿದನು.
8ಎಜ್ರನೊಂದಿಗೆ ಬಾಬೆಲೋನಿನಿಂದ ಹಿಂದಿರುಗಿದವರ ಪಟ್ಟಿ
1ಅರ್ತಷಸ್ತ ರಾಜನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬೆಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ.2ಫೀನೆಹಾಸನ ಸಂತಾನದವರಲ್ಲಿ ಗೇರ್ಷೋಮ್; ಈತಾಮಾರನ ಸಂತಾನದವರಲ್ಲಿ ದಾನಿಯೇಲ್; ದಾವೀದನ ಸಂತಾನದವರಲ್ಲಿ ಶೆಕನ್ಯನ ಮೊಮ್ಮಗನಾದ ಹಟ್ಟೂಷ್.3ಪರೋಷಿನವರಲ್ಲಿ ಜೆಕರ್ಯನೂ ಅವನೊಡನೆ ಶೆಕನ್ಯನ ವಂಶಕ್ಕೆ ಸೇರುವ 150 ಗಂಡಸರು.4ಪಹತ್ ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೋವೇನೈಯೂ ಮತ್ತು ಅವನೊಡನೆ 200 ಗಂಡಸರು.5ಜತ್ತೂವಿನವರಲ್ಲಿ ಯಹಜೀಯೇಲನ ಮಗನಾದ ಶೆಕನ್ಯನೂ ಹಾಗೂ ಅವನೊಡನೆ 300 ಗಂಡಸರು.6ಆದೀನನವರಲ್ಲಿ ಯೋನಾತಾನನ ಮಗನಾದ ಎಬೆದನೂ ಅವನೊಡನೆ 50 ಗಂಡಸರು.7ಏಲಾಮಿನವರಲ್ಲಿ ಅತಲ್ಯನ ಮಗನಾದ ಯೆಶಾಯನೂ ಅವನೊಡನೆ 70 ಗಂಡಸರು.8ಶೆಫಟ್ಯನವರಲ್ಲಿ ಮಿಕಾಯೇಲನ ಮಗನಾದ ಜೆಬದ್ಯನೂ ಅವನೊಡನೆ 80 ಗಂಡಸರು.9ಯೋವಾಬನವರಲ್ಲಿ ಯೆಹೀಯೇಲನ ಮಗನಾದ ಓಬದ್ಯನೂ ಅವನೊಡನೆ 218 ಗಂಡಸರು.10ಬಾನೀಯವರಲ್ಲಿ ಯೋಸಿಫ್ಯನ ಮಗನಾದ ಶಿಲೋಮೀತನೂ ಅವನೊಡನೆ 160 ಗಂಡಸರು.11ಬೇಬೈಯವರಲ್ಲಿ ಬೇಬೈಯ ಮಗನಾದ ಜೆಕರ್ಯನೂ ಅವನೊಡನೆ 28 ಗಂಡಸರು.12ಅಜ್ಗಾದನವರಲ್ಲಿ ಹಕ್ಕಾಟಾನನ ಮಗನಾದ ಯೋಹಾನಾನನೂ ಅವನೊಡನೆ 110 ಗಂಡಸರು.13ಅದೋನೀಕಾಮಿನವರಲ್ಲಿ ಕಡೆಯವರಾದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಎಂಬ ಹೆಸರುಳ್ಳವರೂ ಅವರೊಡನೆ 60 ಗಂಡಸರು.14ಬಿಗ್ವೈಯವರಲ್ಲಿ ಜಕ್ಕೂರನ ಮಗನಾದ ಊತೈಯೂ ಅವನೊಡನೆ 70 ಗಂಡಸರು.15ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯಮಾಡಿಕೂಂಡ ಮೇಲೆ ಸಾಧಾರಣ ಜನರೂ, ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂತು.16ಆದುದರಿಂದ ನಾನು ಪ್ರಧಾನರಾದ ಎಲೀಯೆಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ, ಪಂಡಿತರಾದ ಯೋಯಾರೀಬ್ ಎಲ್ನಾತಾನ್ ಇವರನ್ನೂ ಕರೆಯಿಸಿದೆನು.17ಅವರ ತರುವಾಯ ನಾನು ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ, ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ, ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದ ಪರಿಚಾರಕರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ.18ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರೆಕ್ಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ, ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ,19ಮೆರಾರೀಯರಲ್ಲಿ ಹಷಬ್ಯನನ್ನೂ ಅವನೊಡನೆ ಯೆಶಾಯನನ್ನೂ, ಅವರ ಪುತ್ರ ಸಹೋದರರಲ್ಲಿ ಇಪ್ಪತ್ತು ಜನರು,20ದಾವೀದನೂ ಅವನ ಮುಖ್ಯಸ್ಥರನ್ನು ಲೇವಿಯರೊಂದಿಗೆ ಸೇವೆಗಾಗಿ ಕೊಟ್ಟು ದೇವಸ್ಥಾನ ಪರಿಚಾರಕರಲ್ಲಿ ಇನ್ನೂರಿಪ್ಪತ್ತು ಜನರನ್ನೂ ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು.21ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.22ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು.23ಆದುದರಿಂದ ನಾವು ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.ದೇವಾಲಯಕ್ಕೆ ಸಲ್ಲಿಸಿದ ಕಾಣಿಕೆಗಳು
24ಅನಂತರ ನಾನು ಯಾಜಕರ ಮುಖ್ಯಸ್ಥರಲ್ಲಿ ಶೇರೇಬ್ಯ, ಹಷಬ್ಯ ಇವರ ಸಹೋದರರಲ್ಲಿ ಹತ್ತು ಜನರನ್ನೂ ಆರಿಸಿಕೊಂಡು ಅರಸನಿಂದಲೂ, ಅವನ ಮಂತ್ರಿಗಳಿಂದಲೂ, ಸರದಾರರಿಂದಲೂ ಮತ್ತು25ಇಸ್ರಾಯೇಲರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ, ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.26ಅವರ ಕೈಯಲ್ಲಿ ಕೊಟ್ಟ ಬೆಲೆಬಾಳುವ ಸಾಮಾನುಗಳ ತೂಕ: ಬೆಳ್ಳಿಯು ಆರುನೂರೈವತ್ತು ತಲಾಂತು, ಬಂಗಾರವು ನೂರು ತಲಾಂತು,27ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು ; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.28ನಾನು ಅವರಿಗೆ, <<ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ, ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು.29ಆದುದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿ ಇಡುವವರೆಗೂ ಕಾಯಿರಿ>> ಎಂದು ಹೇಳಿದನು.30ಆ ಯಾಜಕರೂ ಮತ್ತು ಲೇವಿಯರೂ, ಯೆರೂಸಲೇಮಿನ ದೇವಾಲಯಕ್ಕೆ ತಲುಪಿಸುವುದಕ್ಕೋಸ್ಕರ ಬೆಳ್ಳಿಬಂಗಾರವನ್ನೂ, ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿಟ್ಟುಕೊಂಡರು.31ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.32ನಾವು ಯೆರೂಸಲೇಮನ್ನು ಸೇರಿ ಮೂರು ದಿನ ವಿಶ್ರಮಿಸಿಕೊಂಡೆವು.33ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗನಾದ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.34ಆಗಲೇ ಎಲ್ಲವುಗಳ ತೂಕವು ಲಿಖಿತವಾಯಿತು.35ದೇಶಾಂತರದ ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲರ ದೇವರಿಗೆ ತೊಂಭತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ಸಮಸ್ತ ಇಸ್ರಾಯೇಲರ ನಿಮಿತ್ತವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮವೇ.36ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು.
9ನಿಷಿದ್ಧ ವಿವಾಹ
1ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು, <<ಇಸ್ರಾಯೇಲರಲ್ಲಿ ಸಾಧಾರಣಜನರೂ, ಯಾಜಕರೂ, ಲೇವಿಯರೂ, ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು ಮತ್ತು ಅಮೋರಿಯರು ಎಂಬ ಅನ್ಯ ದೇಶಗಳವರ ಬಳಿಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿದ್ದಾರೆ.2ಅವರು ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಮಕ್ಕಳನ್ನು ತೆಗೆದುಕೊಂಡದ್ದರಿಂದ ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಯಿತು. ಪ್ರಭುಗಳೂ ಮತ್ತು ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು>> ಎಂದು ತಿಳಿಸಿದರು.ಎಜ್ರನ ಪ್ರಲಾಪ ಮತ್ತು ಪ್ರಾರ್ಥನೆ
3ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.4ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು.5ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ:6<<ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.7ನಾವು ನಮ್ಮ ಪೂರ್ವಿಕರ ಕಾಲದಿಂದ ಇಂದಿನ ವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ, ನಮ್ಮ ಅರಸರೂ ಮತ್ತು ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ, ಸೆರೆಗೂ, ಸುಲಿಗೆಗೂ, ಅಪಮಾನಕ್ಕೂ ಗುರಿಯಾದೆವು.8ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವನವನ್ನು ಅನುಗ್ರಹಿಸಿದ್ದಾನೆ.9ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ, ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.10ಇಷ್ಟು ಉಪಕಾರವನ್ನು ಪಡೆದ ನಾವು ಏನು ಅರಿಕೆಮಾಡಿಕೊಳ್ಳಲು ಸಾಧ್ಯ? ನಮ್ಮ ದೇವರೇ, ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ.11ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, <ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ, ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಆ ದೇಶವು ಎಲ್ಲೆಲ್ಲೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ.12ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂ ಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂ ಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ಥ್ಯವನ್ನಾಗಿ ಬಿಡುವಿರಿ> ಎಂದು ಹೇಳಿದಿಯಲ್ಲಾ.13ನಮ್ಮ ದುಷ್ಕರ್ಮ ಮಹಾಪರಾಧಗಳ ನಿಮಿತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟು ಜನರನ್ನು ಉಳಿಸಿದಿ.14ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ?15ಯೆಹೋವನೇ, ಇಸ್ರಾಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿಮಿತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು>> ಎಂದು ಬೇಡಿಕೊಂಡೆನು.
10ಪಾಪನಿವೇದನೆ
1ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.2ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, <<ಇಸ್ರಾಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು.3ಸ್ವಾಮಿಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವನೂ. ನೀನು ಹೇಳಿಕೊಟ್ಟ ಬುದ್ಧಿವಾದಕ್ಕೆ ಅನುಸಾರವಾಗಿ ಎಲ್ಲಾ ಹೆಂಡತಿಯರನ್ನೂ, ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ ಈಗಲೇ ನಮ್ಮ ದೇವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯೋಣ.4ಎದ್ದೇಳು, ಈ ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು. ಧೈರ್ಯದಿಂದ ಕೈಹಾಕು>> ಎಂದು ಹೇಳಿದನು.5ಆಗ ಎಜ್ರನು ಎದ್ದು ಯಾಜಕರ ಮತ್ತು ಲೇವಿಯರ ಮುಖ್ಯಸ್ಥರಿಗೂ, ಎಲ್ಲಾ ಇಸ್ರಾಯೇಲರಿಗೂ ಈ ಪ್ರಕಾರ ನಡೆಯುವುದಾಗಿ ಪ್ರಮಾಣಮಾಡಬೇಕೆಂದು ಹೇಳಲು ಅವರು ಹಾಗೆಯೇ ಪ್ರಮಾಣಮಾಡಿದರು.6ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.7ತರುವಾಯ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ, <<ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿನಲ್ಲಿ ಬಂದು ಸೇರಬೇಕು.8ಎಲ್ಲಾ ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿನಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು>> ಎಂದು ಪ್ರಕಟಿಸಿದರು.9ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತವಾಗಿಯೂ, ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಅಂಗಳದಲ್ಲಿ ಕುಳಿತುಕೊಂಡರು.10ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ, <<ನೀವು ಅನ್ಯಜನರ ಹೆಣ್ಣುಗಳನ್ನು ಮದುವೆಮಾಡಿಕೊಂಡು ಇಸ್ರಾಯೇಲರ ಅಪರಾಧಗಳನ್ನು ಹೆಚ್ಚಿಸಿದ್ದೀರಿ.11ಈಗ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರಮಾಡಿ, ನಿಮ್ಮ ಪಾಪಗಳನ್ನು ಅರಿಕೆಮಾಡಿ, ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಮತ್ತು ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ>> ಎಂದನು.12ಆಗ ಕೂಡಿಬಂದವರೆಲ್ಲರೂ ಗಟ್ಟಿಯಾಗಿ, <<ನೀನು ಹೇಳಿದಂತೆಯೇ ಮಾಡುವುದು ನಮ್ಮ ಕರ್ತವ್ಯ.13ಆದರೆ ಕೂಡಿಬಂದವರು ಬಹು ಜನರು, ಈಗ ಮಳೆಗಾಲ; ಹೊರಗೆ ನಿಲ್ಲುವುದು ಅಸಾಧ್ಯ. ಈ ಕೆಲಸವು ಒಂದೆರಡು ದಿನಗಳಲ್ಲಿ ತೀರುವಂಥದಲ್ಲ; ಈ ವಿಷಯದಲ್ಲಿ ನಮ್ಮ ಅಪರಾಧವು ದೊಡ್ಡದು.14ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ>> ಎಂದು ಉತ್ತರಕೊಟ್ಟರು.15ಅಸಾಹೇಲನ ಮಗನಾದ ಯೋನಾತಾನ್, ತಿಕ್ವನ ಮಗನಾದ ಯಹ್ಜೆಯ ಎಂಬವರು ಮಾತ್ರ ಈ ಅಭಿಪ್ರಾಯವನ್ನು ವಿರೋಧಿಸಿದರು; ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರ ಪಕ್ಷವನ್ನು ಹಿಡಿದರು.16ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು.17ಅವರು ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಸಂಗತಿಯನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದೊಳಗಾಗಿ ಪೂರ್ಣವಾಗಿ ವಿಚಾರಿಸಿ ನಿರ್ಧರಿಸಿದರು.ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಪಟ್ಟಿ
18ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರು ಯಾರೆಂದರೆ:ಯಾಜಕರಲ್ಲಿ: ಯೋಚಾದಾಕನ ಮಗ ಯೇಷೂವ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್ ಮತ್ತು ಗೆದಲ್ಯ ಎಂಬುವವರು.
19ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿಕೊಂಡು ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.20ಇಮ್ಮೇರನ ಸಂತಾನದವರಾದ ಹನಾನೀ ಮತ್ತು ಜೆಬದ್ಯ.21ಹಾರೀಮನ ಸಂತಾನದವರಾದ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್ ಮತ್ತು ಉಜ್ಜೀಯ.22ಪಷ್ಹೂರನ ಸಂತಾನದವರಾದ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಮತ್ತು ಎಲ್ಲಾಸ.23ಲೇವಿಯರಲ್ಲಿ: ಯೋಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವವ ಕೇಲಾಯ, ಪೆತಹ್ಯ, ಯೆಹೂದ ಮತ್ತು ಎಲೀಯೆಜೆರ್.24ಗಾಯಕರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್ ಮತ್ತು ಊರೀ.25ಬೇರೆ ಇಸ್ರಾಯೇಲರಲ್ಲಿ: ಪರೋಷ್ ಸಂತಾನದವರಾದ ರಮ್ಯಾಹ, ಇಜ್ಜೀಯ ಎಲ್ಲಾಜಾರ್, ಮಿಯ್ಯಾಮಿನ್, ಮಲ್ಕೀಯ, ಬೆನಾಯ;26ಏಲಾಮ್ ಸಂತಾನದವರಾದ ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್ ಮತ್ತು ಏಲೀಯ.27ಜತ್ತೂ ಸಂತಾನದವರಾದ ಎಲ್ಯೋವೇನೈ, ಎಲ್ಯಾಷೀಬ್, ಮತ್ತನ್ಯ, ಯೆರೇಮೋತ್, ಜಾಬಾದ ಮತ್ತು ಅಜೀಜಾ.28ಬೇಬೈ ಸಂತಾನದವರಾದ ಯೆಹೋಹಾನಾನ್, ಹನನ್ಯ, ಜಬ್ಬೈ ಮತ್ತು ಅತ್ಲೈ.29ಬಾನೀ ಸಂತಾನದವರಾದ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್.30ಪಹತ್ ಮೋವಾಬ್, ಸಂತಾನದವರಾದ ಅದ್ನ ಕೆಲಾಲ್, ಬೆನಾಯ, ಮಾಸೇಯ ಮತ್ತನ್ಯ, ಬೆಚಲೇಲ್, ಬಿನ್ನೂಯ್ ಮತ್ತು ಮನಸ್ಸೆ.31ಹಾರೀಮ್ ಸಂತಾನದವರಾದ ಎಲೀಯೆಜೆರ್, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್,32ಬೆನ್ಯಾಮೀನ್, ಮಲ್ಲೂಕ್ ಮತ್ತು ಶೆಮರ್ಯ.33ಹಾಷುಮ್, ಸಂತಾನದವರಾದ ಮತ್ತೆನೈ, ಮತ್ತತ್ತ, ಜಾಬಾದ, ಎಲೀಫೆಲೆಟ್, ಯೆರೇಮೈ, ಮನಸ್ಸೆ ಮತ್ತು ಶಿಮ್ಮೀ.34ಬಾನೀ ಸಂತಾನದರಾದ ಮಾದೈ, ಅಮ್ರಾಮ್, ಊವೇಲ್35ಬೆನಾಯ, ಬೇದೆಯ, ಕೆಲೂಹು,36ವನ್ಯಾಹ, ಮೆರೇಮೋತ್, ಎಲ್ಯಾಷೀಬ್,37ಮತ್ತನ್ಯ, ಮತ್ತೆನೈ, ಯಾಸೈ,38ಬಾನೀ, ಬಿನ್ನೂಯ್, ಶಿಮ್ಮೀ,39ಶೆಲೆಮ್ಯ, ನಾತಾನ್, ಅದಾಯ,40ಮಕ್ನದೆಬೈ, ಶಾಷೈ, ಶಾರೈ,41ಅಜರೇಲ್, ಶೆಲೆಮ್ಯ, ಶೆಮರ್ಯ,42ಶಲ್ಲೂಮ್, ಅಮರ್ಯ ಮತ್ತು ಯೋಸೇಫ್.43ನೆಬೋ ಸಂತಾನದವರಾದ ಯೆಗೀಯೇಲ್, ಮತ್ತಿತ್ಯ, ಜಾಬಾದ, ಜೆಬೀನ, ಯದ್ದೈ, ಯೋವೇಲ್ ಮತ್ತು ಬೆನಾಯ.44ಇವರೆಲ್ಲರೂ ಅನ್ಯಕುಲದ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳು ಹುಟ್ಟಿದ್ದರು.
ನೆಹೆಮೀಯನು
1ನೆಹೆಮೀಯನ ಪ್ರಾರ್ಥನೆ
1ಹಕಲ್ಯನ ಮಗನಾದ ನೆಹೆಮೀಯನ ಚರಿತ್ರೆ: ಇಪ್ಪತ್ತನೆಯ ವರ್ಷದ ಮಾರ್ಗಶಿರ್ಷ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದಾಗ,2ನನ್ನ ಸಹೋದರಲ್ಲಿ ಒಬ್ಬನಾದ ಹನಾನೀಯನೂ, ಬೇರೆ ಕೆಲವರು ಯೆಹೂದ ಜನರೊಂದಿಗೆ, ನನ್ನ ಬಳಿಗೆ ಬಂದರು. ಸೆರೆಯಾಳುಗಳಾಗಿ ಹೋಗಿದ್ದವರಲ್ಲಿ ಕೆಲವು ಯೆಹೂದ್ಯರು ತಪ್ಪಿಸಿಕೊಂಡು ನನ್ನ ಬಳಿಗೆ ಬಂದಾಗ ಯೆರೂಸಲೇಮಿನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸಿದೆನು.3ಅವರು ನನಗೆ, <<ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ>> ಎಂದು ಹೇಳಿದರು.4ನಾನು ಈ ವರ್ತಮಾನವನ್ನು ಕೇಳಿದ ಕ್ಷಣವೇ ನೆಲದ ಮೇಲೆ ಬಿದ್ದು ಅತ್ತೆನು; ಹಲವು ದಿನಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕದ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.5ಆ ವಿಜ್ಞಾಪನೆಗಳಲ್ಲಿ ನಾನು, <<ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,6ಕೃಪೆಮಾಡಿ ನನ್ನ ಮೊರೆಗೆ ಕಿವಿಗೊಡು, ನನ್ನನ್ನು ಕಟಾಕ್ಷಿಸು, ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲರಿಗಾಗಿ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆ ಮಾಡುತ್ತಾ ಇದ್ದೇನೆ; ನಾನೂ, ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರಾಗಿದ್ದೇವೆ.7ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.8ಆದರೂ, ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ನೆನಪಿಸಿಕೊಳ್ಳಿರಿ; <ನೀವು ಅವಿಧೇಯರಾಗಿ ನಡೆಯುವುದಾದರೆ ನಾನು ನಿಮ್ಮನ್ನು ಜನಾಂಗಗಳ ಮದ್ಯ ಚದುರಿಸಿಬಿಡುವೆನು;9ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು> ಎಂದು ಹೇಳಿರುವೆಯಲ್ಲಾ; ಆ ಮಾತನ್ನು ಸ್ಮರಿಸಿರಿ.10<<ಅವರು ನಿನ್ನ ಸೇವಕರೂ, ನೀನು ನಿನ್ನ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.11ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು>> ಎಂದು ಪ್ರಾರ್ಥಿಸಿದೆನು.
2ನೆಹೆಮೀಯನು ಯೆರೂಸಲೇಮಿಗೆ ಹೋಗಲು ರಾಜಾಜ್ಞೆಹೊಂದಿದ್ದು
1ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ.2ಅರಸನು ನನಗೆ, <<ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು>> ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು.3ನಾನು ಅರಸನಿಗೆ, <<ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?>> ಎಂದು ಹೇಳಿದೆನು.4ಆಗ ಅರಸನು, <<ನಿನ್ನ ಅಪೇಕ್ಷೆಯೇನು>> ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,5ಅರಸನಿಗೆ ಹೀಗೆ ಉತ್ತರಕೊಟ್ಟೆನು, <<ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತು ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು>> ಎಂದು ಹೇಳಿದೆನು.6ರಾಣಿಯು ಅರಸನ ಹತ್ತಿರದಲ್ಲೇ ಕುಳಿತುಕೊಂಡಿದ್ದಳು. ಅರಸನು ನನಗೆ, <<ಪ್ರಯಾಣಕ್ಕೆ ನಿನಗೆಷ್ಟು ಕಾಲ ಬೇಕು? ಯಾವಾಗ ಹಿಂದಿರುಗುವಿ>> ಎಂದು ವಿಚಾರಿಸಿದಾಗ ನಾನು ಕಾಲವನ್ನು ಸೂಚಿಸಲು ಅರಸನು ಒಪ್ಪಿಕೊಂಡು ಅಪ್ಪಣೆಕೊಟ್ಟನು.7ತರುವಾಯ ನಾನು ಅರಸನಿಗೆ, <<ನದಿಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳ ಮೂಲಕ ಹಾದು ಯೆಹೂದ ಸೀಮೆಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ8ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು>> ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.9ಅರಸನು ನನ್ನನ್ನು ಕಳುಹಿಸುವಾಗ ಸೇನಾಧಿಪತಿಗಳನ್ನೂ, ರಾಹುತರನ್ನೂ ನನ್ನೊಡನೆ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು.ನೆಹೆಮೀಯನು ರಾತ್ರಿಯಲ್ಲಿ ಪೌಳಿಗೋಡೆಯನ್ನು ಪರೀಕ್ಷಿಸಿದ್ದು
10ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ , ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.11ಅನಂತರ ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿನಗಳವರೆಗೂ ಇದ್ದೆನು.12ಆಮೇಲೆ ಯೆರೂಸಲೇಮಿಗಾಗಿ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂಬುದನ್ನು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.13ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಿಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಿಲುಗಳನ್ನೂ ನೋಡುತ್ತಾ, ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆನು.14ಅಲ್ಲಿಂದ ಬುಗ್ಗೆ ಬಾಗಿಲನ್ನು ಹಾದು ಅರಸನ ಕೊಳಕ್ಕೆ ಬಂದೆನು. ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿರಲಿಲ್ಲ.15ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು.16ನಾನು ಆ ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ.17ನಾನು ಅವರಿಗೆ, <<ನಮ್ಮ ದುರಾವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ; ಯೆರೂಸಲೇಮ್ ಪಟ್ಟಣವು ಹಾಳು ಬಿದ್ದಿದೆ, ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇಮಿನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಅಳಿಸಿ ಹೋಗುವುದು>> ಎಂದು ಹೇಳಿದೆನು.18ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, <<ಬನ್ನಿರಿ, ಕಟ್ಟೋಣ>> ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು.19ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, <<ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?>> ಎಂದು ಕೇಳಿದರು.20ನಾನು ಅವರಿಗೆ, <<ಪರಲೋಕದ ದೇವರು ನಮಗೆ ಕಾರ್ಯವನ್ನು ಸಾಧಿಸಿಕೊಡುವನು. ಆದುದರಿಂದ ಆತನ ಸೇವಕರಾದ ನಾವು ಕಟ್ಟುವುದಕ್ಕೆ ಮನಸ್ಸುಮಾಡಿದ್ದೇವೆ. ನಿಮಗಾದರೋ ಯೆರೂಸಲೇಮಿನಲ್ಲಿ ಯಾವ ಪಾಲೂ, ಹಕ್ಕೂ, ಹೆಸರೂ, ಸ್ಮಾರಕವೂ ಇರುವುದಿಲ್ಲ>> ಎಂದು ಉತ್ತರಕೊಟ್ಟೆನು.
3ಪೌಳಿಗೋಡೆಯನ್ನು ಕಟ್ಟಿದವರ ಪಟ್ಟಿ
1ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು.2ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು; ನಂತರ ಇಮ್ರಿಯನ ಮಗನಾದ ಜಕ್ಕೂರನು.3ಮೀನುಬಾಗಿಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು ತಿರುಗುಣಿ ಅಗುಳಿಗಳನ್ನು ಇರಿಸಿದರು.4ಅಲ್ಲಿಂದ ಮುಂದಕ್ಕೆ ಗೋಡೆಯನ್ನು ದುರಸ್ತಿ ಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್. ಆ ಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ನಂತರ ಬಾನನ ಮಗನಾದ ಚಾದೋಕ್; ಮುಂದಕ್ಕೆ ತೆಕೋವದವರು.5ತೆಕೋವದವರಲ್ಲಿ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.6ಹಳೆಯದಾಗಿದ್ದ ಬಾಗಿಲುಗಳ ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ, ಬೆಸೋದ್ಯನ ಮಗನಾದ ಮೆಷುಲ್ಲಾಮನೂ. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಇರಿಸಿದರು.7ಅಲ್ಲಿಂದ ನದಿಯಾಚೆಯ ದೇಶಾಧಿಪತಿಯ ನ್ಯಾಯಸ್ಥಾನದವರೆಗೆ ಗಿಬ್ಯೋನಿನವನಾದ ಮೆಲೆಟ್ಯ, ಮೇರೋನೋತಿನವನಾದ ಯಾದೋನ್. ಇವರೂ, ಗಿಬ್ಯೋನ್ ಮತ್ತು ಮಿಚ್ಪ ಊರುಗಳವರೂ ಜೀರ್ಣೋದ್ಧಾರ ಮಾಡಿದ್ದರು.8ಇದಾದ ನಂತರ ಹರ್ಹಯನ ಮಗನಾದ ಅಕ್ಕಸಾಲಿಗನಾದ ಉಜ್ಜೀಯೇಲ್; ಆ ಮೇಲೆ ಗಾಣಿಗನಾದ ಹನನ್ಯ; ಇವರು ಅಗಲವಾದ ಗೋಡೆಯವರೆಗೂ ಯೆರೂಸಲೇಮನ್ನು ಕಟ್ಟಿ ಭದ್ರಪಡಿಸಿದರು.9ನಂತರ ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹೂರನ ಮಗನೂ ಆದ ರೆಫಾಯನು ಅದರ ಕುಂದುಕೊರತೆಗಳನ್ನು ಸರಿಪಡಿಸಿದನು.10ಇವರ ನಂತರ ಹರೂಮಫನ ಮಗನಾದ ಯೆದಾಯನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಹಷಬ್ನೆಯನ ಮಗನಾದ ಹಟ್ಟೂಷ್.11ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರೀಮನ ಮಗನಾದ ಮಲ್ಕೀಯನೂ, ಪಹತ್ ಮೋವಾಬ್ಯನ ಮಗನಾದ ಹಷ್ಷೂಬನು.12ಅದರ ಆಚೆಗೆ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹಲ್ಲೊಹೇಷನ ಮಗನೂ ಆದ ಶಲ್ಲೂಮ ಮತ್ತು ಅವನ ಪುತ್ರಿಯರು.13ತಗ್ಗಿನ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಹಾನೂನನೂ, ಜಾನೋಹ ಊರಿನವರು. ಇವರು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ಅಲ್ಲಿಂದ ತಿಪ್ಪೆ ಬಾಗಿಲಿನವರೆಗೂ ಸಾವಿರ ಮೊಳದ ಗೋಡೆಯನ್ನು ಕಟ್ಟಿದರು.14ತಿಪ್ಪೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಬೇತ್ ಹಕ್ಕೆರೆಮಿನ ಅರ್ಧ ಪಟ್ಟಣಗಳ ಒಡೆಯನೂ, ರೇಕಾಬನ ಮಗನೂ ಆದ ಮಲ್ಕೀಯ. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿದನು.15ಬುಗ್ಗೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ಒಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ದಾವೀದ ನಗರದಿಂದ ಇಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.16ಇವನ ನಂತರ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವರು ಬೇತ್ಚೂರಿನ ಒಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.17ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್ ಸಮೀಪದಲ್ಲೇ ತನ್ನ ಪಟ್ಟಣದವರೊಡನೆ ಕಟ್ಟುತ್ತಿದ್ದ ಕೆಯೀಲದ ಅರ್ಧ ಪಟ್ಟಣಗಳ ಒಡೆಯನಾದ ಹಷಬ್ಯ ಇವರು.18ಇವರ ನಂತರ ಇವರ ಬಂಧುಗಳಲ್ಲಿ ಕೆಯೀಲದ [ಎರಡನೆಯ] ಅರ್ಧ ಪಟ್ಟಣಗಳ ಒಡೆಯನೂ, ಹೇನಾದಾದನ ಮಗನೂ ಆದ ಬವ್ವೈ .19ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಟಿಲುಗಳ ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ ಯೇಷೂವನ ಮಗ ಏಜೆರನು ಜೀರ್ಣೋದ್ಧಾರ ಮಾಡಿದನು.20ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ ಜಕ್ಕೈಯ ಮಗನಾದ ಬಾರೂಕನು ಆಸಕ್ತಿಯಿಂದ ಅದನ್ನು ಭದ್ರಪಡಿಸಿದನು.21ಇವನು ಆಚೆ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು.22ಮುಂದಿನ ಭಾಗವನ್ನು ಜೀರ್ಣೋದ್ಧಾರ ಮಾಡಿದವರು ಯೊರ್ದನ್ ಹೊಳೆಯ ತಗ್ಗಿನಲ್ಲಿ ವಾಸಿಸುತ್ತಿದ್ದ ಯಾಜಕರು.23ಇವರ ನಂತರ ಬೆನ್ಯಾಮೀನ್ ಮತ್ತು ಹಷ್ಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದರು. ಇವರ ನಂತರ ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ. ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು.24ಇವನ ನಂತರ ಅಜರ್ಯನ ಮನೆಯಿಂದ ಮೂಲೆಯವರೆಗೆ ಇರುವ ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.25ಸೆರೆಮನೆಯ ಅಂಗಳದ ಹತ್ತಿರವಿದ್ದ ಅರಸನ ಅರಮನೆಯ ಮೇಲಿನ ಗೋಡೆಯನ್ನು ಮೀರಿನಿಂತಿರುವ ಮೂಲೆ ಗೋಪುರದ ಎದುರಿನ ಭಾಗವನ್ನು ಊಜೈಯನ ಮಗನಾದ ಪಾಲಾಲನೂ. ಇವನ ನಂತರ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು.26ಈಗ ಮೂಲೆ ಗೋಪುರ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ವಾಸಸ್ಥಾನವಾಗಿತ್ತು.27ಆ ದೊಡ್ಡ ಮೂಲೆ ಗೋಪುರದ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು.28ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು.29ಇವರ ನಂತರ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.30ಇವನ ನಂತರ ಶೆಲೆಮ್ಯನ ಮಗನಾದ ಹನನ್ಯ; ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಚಾಲಾಫನ ಆರನೆಯ ಮಗನಾದ ಹಾನೂನ್. ಇವನ ನಂತರ ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಂಡನು.31ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ. ಇವನು ಸೈನ್ಯದವರು ಸೇರಿಬರುವ ಬಾಗಿಲಿನೆದುರಿನಲ್ಲಿರುವ ದೇವಾಲಯದ ಸೇವಕರ ಮತ್ತು ವರ್ತಕರ ಕೇರಿಯ ವರೆಗೂ ಮತ್ತು ಮೂಲೆಯುಪ್ಪರಿಗೆಯವರೆಗೂ ಜೀರ್ಣೋದ್ಧಾರ ಮಾಡಿದನು.32ಈ ಮೂಲೆಯುಪ್ಪರಿಗೆಗೂ ಕುರಿಬಾಗಿಲಿಗೂ ಮಧ್ಯದಲ್ಲಿದ್ದ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಅಕ್ಕಸಾಲಿಗರು ಮತ್ತು ವರ್ತಕರು.
4ಪೌಳಿಗೋಡೆಯನ್ನು ಕಟ್ಟುವುದಕ್ಕೆ ಅಡ್ಡಿ ಮಾಡಿದ್ದು
1ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಗೊತ್ತಾದಾಗ ಅವನು ಬಹಳ ಹೊಟ್ಟೆಕಿಚ್ಚಿನಿಂದ ಕೋಪಗೊಂಡು ಯೆಹೂದ್ಯರನ್ನು ಗೇಲಿ ಮಾಡಿದನು.2ತನ್ನ ಸಹೋದರರ ಮತ್ತು ಸಮಾರ್ಯದ ಸೈನ್ಯದವರ ಮುಂದೆಯೂ, <<ಬಲಹೀನರಾದ ಈ ಯೆಹೂದ್ಯರು ಮಾಡುವುದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮುಗಿಸುವರೇನು? ಸುಟ್ಟುಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸಲೂ ಸಾಧ್ಯವೇ?>> ಎಂದು ಹೇಳಿದನು.3ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯಾದ ಟೋಬೀಯನು, <<ಅವರು ಹೇಗೆ ಕಟ್ಟಿದ್ದರೂ ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಉರುಳಿ ಬಿದ್ದು ಹೋಗುವುದು>> ಎಂದನು.4ನಮ್ಮ ದೇವರೇ ಕೇಳು, ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಿದ್ದಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡು.5ಅವರ ಅಪರಾಧವನ್ನು ಕ್ಷಮಿಸಬೇಡ; ನಿನ್ನೆದುರಿಗಿರುವ ಅವರ ಅಪರಾಧವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿ ಕೋಪಗೊಳಿಸಿದ್ದಾರಲ್ಲಾ.6ಆದರೂ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟಿದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಸಮನಾಗಿ ಕಟ್ಟಲಾಯಿತು.7ಸನ್ಬಲ್ಲಟನೂ, ಟೋಬೀಯನೂ, ಅರಬಿಯರೂ, ಅಮ್ಮೋನಿಯರೂ, ಅಷ್ಡೋದಿನವರೂ ಯೆರೂಸಲೇಮಿನ ಗೋಡೆಯ ಜೀರ್ಣೋದ್ಧಾರ ಕಾರ್ಯವು ಮುಂದುವರಿದು, ಅದರ ಸಂದುಗಳು ತಿರುಗಿ ಸರಿಯಾಗುತ್ತಾ ಬರುವುದನ್ನು ಕೇಳಿ ಬಹುಕೋಪಗೊಂಡರು.8ನಾವು ಒಟ್ಟಾಗಿ ಯೆರೂಸಲೇಮಿನವರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗಿ ಅವರನ್ನು ಗಲಿಬಿಲಿಗೊಳಿಸೋಣ ಎಂದು ಒಳಸಂಚು ಮಾಡಿಕೊಂಡರು.9ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಅವರಿಗೆ ವಿರುದ್ಧವಾಗಿ ಅವರು ಬರುವ ದಾರಿಯಲ್ಲಿ ಹಗಲಿರುಳು ಕಾವಲುಗಾರರನ್ನಿರಿಸಿದೆವು.10ಇತ್ತ ಯೆಹೂದ್ಯರು, <<ಹೊರೆ ಹೊರುವವರ ಬಲವು ಕುಂದಿಹೋಯಿತು, ಧೂಳಿನ ರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದ ಆಗುವುದಿಲ್ಲ>> ಎಂದರು.11ಮತ್ತು ನಮ್ಮ ವಿರೋಧಿಗಳು, <<ಅವರಿಗೆ ತಿಳಿಯದಂತೆ, ಗೋಚರವಾಗದಂತೆ ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ>> ಎಂದುಕೊಳ್ಳುತ್ತಿದ್ದರು.12ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು ಬಂದು ನಮಗೆ, ನೀವು ಯಾವ ಕಡೆಗೆ ತಿರುಗಿಕೊಂಡರೂ ಎಲ್ಲಾ ಕಡೆಗಳಿಂದಲೂ ಅವರು ನಮ್ಮ ವಿರುದ್ಧವಾಗಿ ಯುದ್ಧಕ್ಕೆ ಬರುತ್ತಾರೆ ಎಂದು ಪದೇ ಪದೇ ಬಂದು ತಿಳಿಸುತ್ತಿದ್ದರು.13ಆಗ ನಾನು ಜನರಿಗೆ ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿದೆನು.14ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, <<ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ>> ಎಂದು ಹೇಳಿದೆನು.15ನಮ್ಮ ಶತ್ರುಗಳು ತಮ್ಮ ಉದ್ದೇಶ ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥಮಾಡಿದನೆಂದೂ ತಿಳಿದುಕೊಂಡಾಗ ಅವರು ನಮ್ಮನ್ನು ಬಿಟ್ಟು ಹೋದರು. ನಾವೆಲ್ಲರೂ ನಮ್ಮ ನಮ್ಮ ಪೌಳಿಗೋಡೆಯ ಕೆಲಸವನ್ನು ಪುನಃ ಪ್ರಾರಂಭಿಸಲು ತೊಡಗಿದೆವು.16ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧ ಮಂದಿ ಕೆಲಸದಲ್ಲಿ ಸಹಾಯಮಾಡಿದರು, ಅರ್ಧ ಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಈ ಕಾರ್ಯಕ್ಕಾಗಿ ನೇಮಿಸಲ್ಪಟ್ಟ ಅಧಿಕಾರಿಗಳು ಗೋಡೆಕಟ್ಟುವ ಯೆಹೂದ್ಯರ ಹಿಂದೆ ನಿಂತರು.17ಹೊರೆ ಹೊರುವವರು ಒಂದು ಕೈಯಿಂದ ಹೊರೆಹೊತ್ತುಕೊಳ್ಳುತ್ತಾ ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಿದ್ದರು.18ಪೌಳಿಗೋಡೆಯನ್ನು ಕಟ್ಟುವವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಂಡು ಕಟ್ಟುತ್ತಿದ್ದನು. ನಾನಂತೂ ಕೊಂಬೂದುವವನೊಬ್ಬನನ್ನು ನನ್ನ ಬಳಿಯಲ್ಲಿರಿಸಿಕೊಂಡಿದ್ದೆ.19ನಾನು ಶ್ರೀಮಂತರಿಗೂ, ಅಧಿಕಾರಿಗಳಿಗೂ ಉಳಿದ ಜನರಿಗೂ, <<ನಾವು ಮಾಡುವ ಕೆಲಸವು ಬಹಳ ದೊಡ್ಡದೂ, ಅನೇಕ ಸ್ಥಳಗಳಲ್ಲಿ ನಡೆಯುವಂಥದ್ದೂ ಆಗಿದೆ; ನಾವು ಗೋಡೆಯ ಮೇಲೆ ಚದರಿ ಒಬ್ಬರಿಗೊಬ್ಬರು ದೂರವಾಗಿರುತ್ತೇವೆ.20ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಿಬರುವುದೋ ಆ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧ ಮಾಡುವನು>> ಎಂದು ಹೇಳಿದೆನು.21ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು. ನನ್ನ ಸೇವಕರಲ್ಲಿ ಅರ್ಧ ಮಂದಿ ಬರ್ಜಿಯನ್ನು ಹಿಡಿದುಕೊಂಡಿದ್ದರು.22ಇದಲ್ಲದೆ, ನಾನು ಆ ಸಮಯದಲ್ಲಿ ಜನರಿಗೆ, <<ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರುವಂತೆಯು ಹಾಗೂ ಹಗಲಿನಲ್ಲಿ ಕೆಲಸ ನಡಿಸುವಂತೆಯು ನೀವು ನಿಮ್ಮ ನಿಮ್ಮ ಆಳುಗಳೊಡನೆ ಯೆರೂಸಲೇಮಿನಲ್ಲಿಯೇ ವಾಸಮಾಡಬೇಕು>> ಎಂದು ಅಪ್ಪಣೆ ಮಾಡಿದೆನು.23ನಾನೂ ನನ್ನ ಸಹೋದರರೂ, ಸೇವಕರೂ, ಮೈಗಾವಲಿನವರೂ ನಮ್ಮ ಬಟ್ಟೆಗಳನ್ನು ಬದಲಾಯಿಸಿರಲಿಲ್ಲ. ಪ್ರತಿಯೊಬ್ಬನು ನೀರನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದೆವು .
5ನೆಹೆಮೀಯನ ಪರಹಿತಚಿಂತನೆಯೂ ಔದಾರ್ಯವೂ
1ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.2ಅವರಲ್ಲಿ ಕೆಲವರು, <<ನಾವೂ ನಮ್ಮ ಗಂಡು ಹೆಣ್ಣು ಮಕ್ಕಳೂ ಬಹು ಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಧಾನ್ಯವು ಬೇಕಾಗಿದೆ>> ಎಂದು ಹೇಳಿದರು.3ಇನ್ನು ಕೆಲವರು, <<ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಲು ನಮ್ಮ ಹೊಲ, ದ್ರಾಕ್ಷಿತೋಟ, ಮನೆಗಳನ್ನು ಒತ್ತೆ ಇಟ್ಟಿದ್ದೇವೆ>> ಎಂದು ಹೇಳಿದರು.4ಮತ್ತು ಕೆಲವರು, <<ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು>> ಎಂದು ಹೇಳಿದರು.5ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು.6ಅವರ ಬೊಬ್ಬೆಯನ್ನೂ, ಮಾತುಗಳನ್ನೂ ಕೇಳಿದಾಗ ನಾನು ಬಹಳ ಸಿಟ್ಟುಗೊಂಡೆನು.7ನಾನು ಮನಸ್ಸಿನಲ್ಲಿ ಸ್ವಲ್ಪ ಆಲೋಚಿಸಿಕೊಂಡು ಶ್ರೀಮಂತರಿಗೂ, ಅಧಿಕಾರಿಗಳಿಗೂ, <<ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದೆಂದರೇನು>> ಎಂದು ಹೇಳಿ ಮಹಾಸಭೆಯನ್ನು ಕೂಡಿಸಿ8ಅವರಿಗೆ, <<ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು>> ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.9ಆನಂತರ ನಾನು ಅವರಿಗೆ, <<ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.10ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿತೆಗೆದುಕೊಳ್ಳುವ ಈ ಪದ್ಧತಿಯನ್ನು ಬಿಟ್ಟುಬಿಡೋಣ.11ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ>> ಎಂದು ಹೇಳಿದೆನು.12ಅದಕ್ಕೆ ಅವರು, <<ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ>> ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.13ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, <<ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ>> ಅಂದೆನು. ಕೂಡಲೆ ಸಭೆಯವರೆಲ್ಲಾ, <<ಹಾಗೆಯೇ ಆಗಲಿ>> ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು.14ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳ ವರೆಗೆ ಅಂದರೆ ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಭತ್ಯದಿಂದ ಜೀವನಮಾಡಲಿಲ್ಲ.15ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.16ಮತ್ತು ನನ್ನ ಎಲ್ಲಾ ಸೇವಕರೂ ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆನು. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.17ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳೂ ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು.18ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕುರಿ, ಕೆಲವು ಪಕ್ಷಿಗಳು ನಮ್ಮ ಭೋಜನಕ್ಕಾಗಿ ಸಿದ್ಧವಾಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲಾ ಬಗೆಯ ದ್ರಾಕ್ಷಾರಸವನ್ನು ಬೇಕಾದಷ್ಟು ಒದಗಿಸಲು ವ್ಯವಸ್ಥೆಮಾಡಿದೆ. ಇಷ್ಟೆಲ್ಲಾ ಇದ್ದರೂ ಆ ಜನರು ಮಾಡುತ್ತಿದ್ದ ಕೆಲಸವು ಬಹು ಕಠಿಣವಾಗಿದ್ದದರಿಂದ ನಾನು ದೇಶಾಧಿಪತಿಗೆ ಸಲ್ಲತಕ್ಕ ಭತ್ಯವನ್ನು ಕೇಳಲೇ ಇಲ್ಲ.19ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.
6ನೆಹೆಮೀಯನ ವಿರೋಧಿಗಳ ಒಳಸಂಚು
1ನಾನು ಪೌಳಿಗೋಡೆಯನ್ನು ಪುನಃ ಕಟ್ಟಿಸಿದೆನು, ಆದರೆ ಹೆಬ್ಬಾಗಿಲುಗಳನ್ನೂ ಇನ್ನೂ ಇಡಿಸಿರಲಿಲ್ಲ. ಜೀರ್ಣೋದ್ಧಾರದ ಕಾರ್ಯಗಳೆಲ್ಲವೂ ಪೂರ್ಣವಾಯಿತೆಂಬುದು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ, ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು.2ಅವರಲ್ಲಿ ಸನ್ಬಲ್ಲಟ್, ಗೆಷೆಮರು ನನಗೆ, <<ಓನೋ ಸಮಭೂಮಿಯ ಒಂದು ಗ್ರಾಮದಲ್ಲಿ ಒಂದು ಸಭೆ ಸೇರೋಣ ಬಾ>> ಎಂದು ಹೇಳಿ ಕಳುಹಿಸಿದರು. ಇದು ಅವರು ನನಗೆ ಕೇಡು ಬಗೆಯುವುದಕ್ಕಾಗಿಯೇ ಎಂದು ತಿಳಿಯಿತು.3ಆಗ ನಾನು ದೂತರ ಮುಖಾಂತರವಾಗಿ ಅವರಿಗೆ, <<ನನಗೆ ಒಂದು ದೊಡ್ಡ ಕೆಲಸವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಆ ಕೆಲಸವು ನಿಂತು ಹೋಗುವುದು; ನಾನು ಬರಲು ಸಾಧ್ಯವಿಲ್ಲ>> ಎಂದು ಹೇಳಿ ಕಳುಹಿಸಿದೆನು.4ಅವರು ನಾಲ್ಕು ಬಾರಿ ನನಗೆ ಅದೇ ಪ್ರಕಾರ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರವನ್ನು ಕೊಟ್ಟೆನು.5ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ತೆರೆದಿರುವ ಒಂದು ಪತ್ರವನ್ನು ಕಳುಹಿಸಿದನು.6ಅದರಲ್ಲಿ <<ಗೆಷೆಮ್ ಎಂಬುವನು ನನಗೆ ತಿಳಿಸಿದ ಪ್ರಕಾರ, ನೀನೂ ಮತ್ತು ಯೆಹೂದ್ಯರೂ ತಿರುಗಿ ಬೀಳಬೇಕೆಂದಿದ್ದೀರಿ; ಆದುದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ ಮತ್ತು ನೀನು ಅವರಿಗೆ ಅರಸನಾಗಬೇಕೆಂದಿರುವೆಯೆಂಬ ಸುದ್ದಿಯು ಜನರಲ್ಲಿ ಹಬ್ಬಿದೆ.7ಇದಲ್ಲದೆ, <ಯೆಹೂದದಲ್ಲಿ ಒಬ್ಬ ಅರಸನಿರುತ್ತಾನೆ> ಎಂದು ನಿನ್ನನ್ನು ಕುರಿತು ಯೆರೂಸಲೇಮಿನಲ್ಲಿ ಪ್ರಕಟಿಸುವುದಕ್ಕೋಸ್ಕರ ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನರು ಹೇಳುತ್ತಿದ್ದಾರೆ. ಈ ಸುದ್ದಿ ರಾಜನಿಗೂ ತಲುಪಿದೆ; ಆದುದರಿಂದ ನಾವು ಸಭೆ ಸೇರಿ ಆಲೋಚಿಸೋಣ ಬಾ>> ಎಂದು ಅದರಲ್ಲಿ ಬರೆದಿತ್ತು.8ಅದಕ್ಕೆ ನಾನು, <<ನೀನು ಬರೆದಿರುವಂಥ ವಿಚಾರಗಳು ಯಾವುದು ಇಲ್ಲಿ ನಡೆದಿರುವುದಿಲ್ಲ; ಅದನ್ನು ನೀನೇ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿರುವೆ>> ಎಂದು ಹೇಳಿ ಕಳುಹಿಸಿದೆನು.9ಹೀಗೆ ಎಲ್ಲರೂ, <<ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ಮುಗಿಸದೆ ಇರಲಿ>> ಎಂದು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ಆದರೆ ನನ್ನ ದೇವರೇ, ನನ್ನ ಕೈಗಳನ್ನು ಬಲಗೊಳಿಸಿ ನನ್ನನ್ನು ಧೈರ್ಯಪಡಿಸು ಎಂದು ಪ್ರಾರ್ಥಿಸಿದೆನು10ಆನಂತರ ನಾನು ಮೆಹೇಟಬೇಲನ ಮೊಮ್ಮಗನೂ, ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆನು. ಅವನು ಅಲ್ಲಿ ಅಡಗಿಕೊಂಡಿದ್ದನು. ಅವನು ನನಗೆ, <<ನಿನ್ನನ್ನು ಕೊಲ್ಲುವುದಕ್ಕೆ ಈ ರಾತ್ರಿಯೇ ಬರುತ್ತಾರೆ. ಆದುದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಗರ್ಭಗುಡಿ ಪ್ರವೇಶಿಸಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ>> ಎಂದು ಹೇಳಿದನು.11ನಾನು, <<ನನ್ನಂಥ ಪುರುಷನು ಓಡಿಹೋಗುವುದು ಯೋಗ್ಯವೋ? ಇದಲ್ಲದೆ, ನನ್ನಂಥವನು ಪ್ರಾಣರಕ್ಷಣೆಗಾಗಿ ಗರ್ಭಗುಡಿ ಪ್ರವೇಶಿಸಬಹುದೇ? ನಾನು ಬರುವುದಿಲ್ಲ>> ಎಂದು ಉತ್ತರಕೊಟ್ಟೆನು.12ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು.13ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ, ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚ ಕೊಟ್ಟಿದ್ದರು.14ನನ್ನ ದೇವರೇ, ಟೋಬೀಯ, ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮತ್ತು ಇತರ ಪ್ರವಾದಿಗಳನ್ನು ನೆನಪಿನಲ್ಲಿಟ್ಟುಕೋ.ಪೌಳಿಗೋಡೆಯನ್ನು ಕಟ್ಟಿ ಮುಗಿಸಿದ್ದು
15ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಪೂರ್ಣಗೊಂಡಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.16ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗದವರಿಗೆ ತಲುಪಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿ ತಗ್ಗಿ ಹೋದರು. ಈ ಕಾರ್ಯವು ದೇವರ ಸಹಾಯದಿಂದಲೇ ಪೂರ್ಣಗೊಂಡಿತು ಎಂಬುದು ಅವರಿಗೆ ತಿಳಿದುಬಂದಿತು.17ಅದೇ ಸಮಯದಲ್ಲಿ ಯೆಹೂದ್ಯ ಶ್ರೀಮಂತರಿಗೂ ಟೋಬೀಯನಿಗೂ ಬಹಳ ಪತ್ರ ವ್ಯವಹಾರಗಳು ನಡೆಯುತ್ತಿದ್ದವು.18ಏಕೆಂದರೆ ಅವನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದ ಹಾಗೂ ಅವನ ಮಗನಾದ ಯೆಹೋಹಾನಾನನೆಂಬ ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆ ಮಾಡಿಕೊಂಡಿದ್ದನು. ಆದುದರಿಂದ ಯೆಹೂದ್ಯರಲ್ಲಿ ಅನೇಕರು ಅವನೊಂದಿಗೆ ಪ್ರಮಾಣ ಮಾಡಿ ಅವರಿಗೆ ವಶವಾಗಿದ್ದರು.19ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕೋಸ್ಕರ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.
71ಗೋಡೆಯನ್ನು ಕಟ್ಟಿ ಮುಗಿಸಿದ ನಂತರ ನಾನು ಬಾಗಿಲುಗಳನ್ನು ಇರಿಸಿದೆನು; ದ್ವಾರಪಾಲಕರನ್ನೂ, ಗಾಯಕರನ್ನೂ, ಲೇವಿಯರನ್ನೂ ನೇಮಿಸಲಾಯಿತು.2ಆನಂತರ ನನ್ನ ತಮ್ಮನಾದ ಹನಾನಿಗೂ, ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ, ಕೋಟೆಯ ಅಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆನು.3ನಾನು ಅವರಿಗೆ, <<ಬಿಸಿಲೇರುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಾಗಲೇ ಬಾಗಿಲುಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ ಯೆರೂಸಲೇಮಿನ ನಿವಾಸಿಗಳೊಳಗೆ ಕಾವಲುಗಾರರನ್ನು ಗೊತ್ತುಮಾಡಿರಿ, ಅವರಲ್ಲಿ ಕೆಲವರು ತಮ್ಮ ಕಾವಲಿನ ಸ್ಥಳಗಳಲ್ಲಿಯೂ, ಇನ್ನು ಕೆಲವರನ್ನು ಅವರ ಮನೆಯ ಎದುರಿನಲ್ಲಿಯೂ ಕಾವಲಿರುವಂತೆ ನೇಮಿಸಬೇಕು>> ಎಂದು ಆಜ್ಞಾಪಿಸಿದೆನು.ಸೆರೆವಾಸದಿಂದ ಹಿಂದಿರುಗಿದವರ ಪಟ್ಟಿ
4ಪಟ್ಟಣವು ವಿಸ್ತಾರವಾಗಿದ್ದರೂ ಅದರೊಳಗೆ ಬಹಳ ಸ್ವಲ್ಪ ಜನರು ಮಾತ್ರ ಇದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.5ಹೀಗಿರಲಾಗಿ ನಾನು ನನ್ನ ದೇವರ ಪ್ರೇರಣೆಯಿಂದ ಗಣ್ಯರನ್ನು, ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಸಾಧಾರಣ ಜನರನ್ನೂ ಜನಗಣತಿಗಾಗಿ ಸಭೆಸೇರಿಸಿದನು. ಆಗ ಯೆರೂಸಲೇಮಿಗೆ ಮೊದಲು ಬಂದವರ ಹೆಸರುಗಳ ಪಟ್ಟಿಯು ನನಗೆ ಸಿಕ್ಕಿತು. ಅದರಲ್ಲಿ ಬರೆದಿದ್ದೇನೆಂದರೆ,6ಬಾಬೆಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆಯಾಗಿ ಒಯ್ಯಲ್ಪಟ್ಟವರು ಹಿಂತಿರುಗಿ ತಮ್ಮ ಸ್ವದೇಶವಾದ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ, ಯೆರೂಸಲೇಮಿಗೂ ಹಿಂತಿರುಗಿದರು.7ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ. ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ ಎಂಬ ನಾಯಕರೊಡನೆ ತಿರುಗಿ ಬಂದ ಇಸ್ರಾಯೇಲರು ಯಾರೆಂದರೆ:ಇಸ್ರಾಯೇಲರ ಸಾಮಾನ್ಯ ಪುರುಷರ ಸಂಖ್ಯೆ
8ಪರೋಷಿನವರು - 2,172.9ಶೆಫಟ್ಯನ ಸಂತಾನದವರು - 372.10ಆರಹನ ಸಂತಾನದವರು - 652.11ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬನ ಸಂತಾನದವರು - 2,818.12ಏಲಾಮಿನ ಸಂತಾನದವರು - 1,254.13ಜತ್ತೂವಿನ ಸಂತಾನದವರು - 845.14ಜಕ್ಕೈಯನ ಸಂತಾನದವರು - 760.15ಬಿನ್ನೂಯನ ಸಂತಾನದವರು - 648.16ಬೇಬೈಯನ ಸಂತಾನದವರು - 628.17ಅಜ್ಗಾದಿನ ಸಂತಾನದವರು - 2,322.18ಅದೋನೀಕಾಮಿನ ಸಂತಾನದವರು - 667.19ಬಿಗ್ವೈಯನ ಸಂತಾನದವರು - 2,067.20ಆದೀನನ ಸಂತಾನದವರು - 655.21ಆಟೇರಿನವರಾದ ಹಿಜ್ಕೀಯನ ಸಂತಾನದವರು - 98.22ಹಾಷುಮಿನ ಸಂತಾನದವರು - 328.23ಬೇಚೈಯನ ಸಂತಾನದವರು - 324.24ಹಾರಿಫಿನ ಸಂತಾನದವರು - 112.25ಗಿಬ್ಯೋನಿನ ಸಂತಾನದವರು - 95.26ಬೇತ್ಲೆಹೇಮ್ ಮತ್ತು ನೆಟೋಫ ಊರಿನವರು - 188.27ಅನಾತೋತ್ ಊರಿನವರು - 128.28ಬೇತಜ್ಮಾವೇತಿನ ಊರಿನವರು - 42.29ಕಿರ್ಯತ್ಯಾರೀಮ್, ಕೆಫೀರಾ ಮತ್ತು ಬೇರೋತ್ ಊರಿನವರು - 743.30ರಾಮಾ ಮತ್ತು ಗೆಬ ಊರಿನವರು - 621.31ಮಿಕ್ಮಾಸಿನವರು - 122.32ಬೇತೇಲ್ ಮತ್ತು ಆಯಿ ಎಂಬ ಊರಿನವರು - 123.33ಎರಡನೆಯ ನೆಬೋವಿನವರು - 52.34ಎರಡನೆಯ ಏಲಾಮಿನವರು - 1,254.35ಹಾರಿಮನವರು - 320.36ಯೆರಿಕೋವಿನವರು - 347.37ಲೋದ್, ಹಾದೀದ್, ಮತ್ತು ಓನೋ ಊರಿನವರು - 721.38ಸೆನಾಹನವರು- 3,930.39ಯಾಜಕರಲ್ಲಿ - ಯೆದಾಯನ ಸಂತಾನದವರಾದ ಯೇಷೂವನ ಮನೆಯವರು - 973.40ಇಮ್ಮೇರನ ಸಂತಾನದವರು - 1,052.41ಪಷ್ಹೂರನ ಸಂತಾನದವರು - 1,247.42ಹಾರಿಮನ ಸಂತಾನದವರು - 1,01743ಲೇವಿಯರಲ್ಲಿ- ಹೋದವ್ಯನ ಸಂತಾನದವರಾದ ಯೇಷೂವ, ಕದ್ಮೀಯೇಲ್ ಸಂತಾನದವರು - 74.44ಗಾಯಕರಲ್ಲಿ; ಆಸಾಫನ ಸಂತಾನದರು - 148.45ದ್ವಾರಪಾಲಕರಲ್ಲಿ; ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು - 138.46ದೇವಾಲಯದ ಸೇವಕರಲ್ಲಿ; ಜೀಹ, ಹಸೂಫ, ಟಬ್ಬಾವೋತ್ ಸಂತಾನದರು,47ಕೇರೋಸ್, ಸೀಯ, ಪಾದೋನ್ ಸಂತಾನದರು,48ಲೆಬಾನ, ಹಗಾಬ, ಸಲ್ಮೈ ಸಂತಾನದರು,49ಹಾನಾನ್, ಗಿದ್ದೇಲ್, ಗಹರ್ ಸಂತಾನದರು,50ರೆವಾಯ, ರೆಚೀನ್, ನೆಕೋದ ಸಂತಾನದರು,51ಗಜ್ಜಾಮ್, ಉಜ್ಜ, ಪಾಸೇಹ ಸಂತಾನದವರು,52ಬೇಸೈ, ಮೆಯನೀಮ್, ನೆಫೀಷೆಸೀಮ್ ಸಂತಾನದವರು,53ಬಕ್ಬೂಕ್, ಹಕ್ಕೂಫ, ಹರ್ಹೂರ್ ಸಂತಾನದವರು,54ಬಚ್ಲೂತ್, ಮೆಹೀದ, ಹರ್ಷ ಸಂತಾನದವರು55ಬರ್ಕೋಸ್, ಸೀಸೆರ, ತೆಮಹ ಸಂತಾನದವರು,56ನೆಚೀಹ, ಹಟೀಫ ಸಂತಾನದವರು.57ಸೊಲೊಮೋನನ ಸೇವಕರಲ್ಲಿ- ಸೋಟೈ, ಸೋಫೆರೆತ್, ಪೆರೀದನ ಸಂತಾನದವರು,58ಯಾಲ, ದರ್ಕೋನ್, ಗಿದ್ದೇಲ್ ಸಂತಾನದವರು,59ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್, ಆಮೋನ್ ಸಂತಾನದವರು.60ಎಲ್ಲಾ ದೇವಾಲಯದ ಸೇವಕರೂ ಸೊಲೊಮೋನನ ಸೇವಕರು ಒಟ್ಟು 392 ಮಂದಿ.61ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಆದ್ದೋನ್ ಮತ್ತು ಇಮ್ಮೇರ್, ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರಗಳ ವಂಶಾವಳಿಗಳನ್ನು ತೋರಿಸಿ ತಾವು ಇಸ್ರಾಯೇಲರೆಂಬುದನ್ನು ಸ್ಥಾಪಿಸಲಾರದವರಾದ,62ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು - 642.63ಯಾಜಕರಲ್ಲಿ: ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯ ದಾಖಲೆ ತೋರಿಸಲಾರದೆ ಹೋದರು. ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು.64ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅವರನ್ನು ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು.65 ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ಆಜ್ಞಾಪಿಸಿದನು.66ಸರ್ವಸಮೂಹದವರ ಒಟ್ಟು ಸಂಖ್ಯೆಯು ನಲ್ವತ್ತೆರಡು ಸಾವಿರದ ಮುನ್ನೂರ ಅರವತ್ತಾಗಿತ್ತು.67ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ಸೇವಕ ಸೇವಕಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರ ಗಾಯಕರೂ ಗಾಯಕಿಯರೂ ಇನ್ನೂರ ನಲ್ವತ್ತೈದು ಮಂದಿ.68ಅವರಿಗೆ ಏಳು ನೂರ ಮೂವತ್ತಾರು ಕುದುರೆಗಳೂ, ಇನ್ನೂರ ನಲ್ವತ್ತೈದು ಹೇಸರಗತ್ತೆಗಳೂ ,69ನಾನೂರ ಮೂವತ್ತೈದು ಒಂಟೆಗಳೂ ಆರು ಸಾವಿರದ ಏಳುನೂರಿಪ್ಪತ್ತು ಕತ್ತೆಗಳೂ ಇದ್ದವು.70ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.71ಬೇರೆ ಕೆಲವು ಮಂದಿ ಗೋತ್ರಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷದ ಹತ್ತು ಸಾವಿರ ತೊಲಾ ಬೆಳ್ಳಿ ;72ಉಳಿದ ಜನರು ಕೊಟ್ಟದ್ದು ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷ ತೊಲಾ ಬೆಳ್ಳಿ , ಅರುವತ್ತೇಳು ಯಾಜಕವಸ್ತ್ರಗಳನ್ನು ನೀಡಿದರು.73ಹೀಗೆ ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಸಾಧಾರಣ ಜನರು ಸೇರಿದವರು, ದೇವಾಲಯದ ಸೇವಕರು ಅಂತೂ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು.
8ಧರ್ಮಶಾಸ್ತ್ರದ ಪಾರಾಯಣ
1ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.2ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು.3ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ನೆರೆದು ಬಂದಿದ್ದ ಗ್ರಹಿಸಲು ಶಕ್ತರಾದ ಸ್ತ್ರೀಪುರುಷರ ಮುಂದೆ ಧರ್ಮಶಾಸ್ತ್ರವನ್ನು ಮುಂಜಾನೆಯಿಂದ ಮಧ್ಯಾಹ್ನದವರೆಗೂ ಓದಿದನು. ಜನರು ಆಲಿಸುತ್ತಾ ಇದ್ದರು.4ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರೂ, ಎಡಗಡೆಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರೂ ನಿಂತುಕೊಂಡಿದ್ದರು.5ಸರ್ವಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ ಎಲ್ಲರೂ ಎದ್ದು ನಿಂತರು.6ಎಜ್ರನು ಪರಾತ್ಪರನಾದ ದೇವರಾದ ಯೆಹೋವನನ್ನು ಸ್ತುತಿಸಿದಾಗ, ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್, ಎಂದು ಹೇಳಿ ನೆಲದವರೆಗೂ ತಲೆಬಾಗಿ ಸ್ತೋತ್ರ ಆರ್ಪಿಸಿ ಯೆಹೋವನನ್ನು ಆರಾಧಿಸಿದರು.7ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.8ಜನರು ಎದ್ದುನಿಂತ ನಂತರ ಅವರು ದೇವರ ಧರ್ಮನಿಯಮಗಳನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದಾಗ ಜನರು ಅರ್ಥಮಾಡಿಕೊಂಡರು.9ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, <<ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ>> ಎಂದು ಹೇಳಿದರು.10ಇದಲ್ಲದೆ ನೆಹೆಮೀಯನು ಅವರಿಗೆ, <<ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ>> ಎಂದನು.11ಲೇವಿಯರೂ ಜನರಿಗೆ, <<ಸುಮ್ಮನಿರಿ, ಇದು ದೇವರ ಪರಿಶುದ್ಧ ದಿನ, ದುಃಖಿಸಬೇಡಿರಿ>> ಎಂದು ಹೇಳಿ ಜನರನ್ನು ಸಂತೈಸಿದರು.12ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.ಪರ್ಣಶಾಲೆಯ ಜಾತ್ರೆ
13ಮರುದಿನ ಎಲ್ಲಾ ಇಸ್ರಾಯೇಲ್ ಗೋತ್ರಪ್ರಧಾನರೂ, ಯಾಜಕರೂ, ಲೇವಿಯರೂ ಧರ್ಮನಿಯಮಗಳ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಸೇರಿಬಂದರು.14 ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದ ಪ್ರಕಾರ ಏಳನೆಯ ತಿಂಗಳಿನ ಜಾತ್ರೆಯಲ್ಲಿ ಇಸ್ರಾಯೇಲರು ಬಿಡಾರಗಳಲ್ಲಿ ವಾಸಮಾಡಬೇಕು.15ಇದು ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯೂ ಡಂಗುರದಿಂದ ಸಾರಲ್ಪಡಬೇಕು ಎಂಬುದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮನಿಯಮಗಳಲ್ಲಿ ಸಿಕ್ಕಿತು. ಅದರಲ್ಲಿ, <<ಆ ಬಿಡಾರಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ್ ಮರ, ಕಾಡು ಒಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳು ಅಲ್ಲದೆ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕು.>>16ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳ, ಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಿಲು, ಎಫ್ರಾಯೀಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.17ನೂನನ ಮಗನಾದ ಯೆಹೋಶುವನ ಕಾಲದಿಂದ ಆ ವರೆಗೂ ಇಸ್ರಾಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿ ಬಂದ ಸರ್ವ ಸಮೂಹದವರಾದರೋ ಬಿಡಾರಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಮಾಡುತ್ತಾ ಬಹಳ ಸಂತೋಷಪಟ್ಟರು.18ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.
9ಪಾಪನಿವೇದನೆಯ ದಿನ
1ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಮ್ಮ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು.2ಇಸ್ರಾಯೇಲ್ ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು, ಎದ್ದು ನಿಂತುಕೊಂಡು ತಮ್ಮ ಪಾಪಗಳನ್ನೂ, ತಮ್ಮ ಪೂರ್ವಿಕರ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.3ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡು ತಮ್ಮ ದೇವರಾದ ಯೆಹೋವನ ಧರ್ಮನಿಯಮಗಳ ಗ್ರಂಥವನ್ನು ಪಾರಾಯಣಮಾಡಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.4ಯೇಷೂವ, ಬಾನೀ ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬುವವರು ಲೇವಿಯರು ಮೆಟ್ಟಿಲುಗಳ ಮೇಲೆ ನಿಂತು ಮಹಾಶಬ್ದದಿಂದ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.5ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, <<ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.6ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ, ಅದರ ಸೈನ್ಯವನ್ನೂ, ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ.7ಯೆಹೋವನೇ, ಅಬ್ರಾಮನನ್ನು ಆರಿಸಿಕೊಂಡು ಕಸ್ದೀಯರ ಊರ್ ಎಂಬ ಪಟ್ಟಣದಿಂದ ಬರಮಾಡಿ, ಅವನಿಗೆ ಅಬ್ರಹಾಮನೆಂಬ ಹೆಸರನ್ನು ಕೊಟ್ಟ ದೇವರು ನೀನೇ.8ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ, ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದರಿಂದ ನೀನು ನೀತಿಸ್ವರೂಪನು.9ಐಗುಪ್ತ ದೇಶದಲ್ಲಿ ನಮ್ಮ ಪೂರ್ವಿಕರಿಗಿದ್ದ ಕಷ್ಟವನ್ನು ನೋಡಿ, ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಆಲಿಸಿದಿ.10ಐಗುಪ್ತ್ಯರು ಗರ್ವಿಗಳಾಗಿ ನಮ್ಮ ಪೂರ್ವಿಕರನ್ನು ಕುಗ್ಗಿಸಿದಾಗ, ನೀನು ಫರೋಹನಲ್ಲಿಯೂ, ಅವನ ಸೇವಕರಲ್ಲಿಯು, ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನು ನಡೆಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿಕೊಂಡಿರುವೆ.11ನಮ್ಮ ಪೂರ್ವಿಕರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದ್ದೀ. ಅವರನ್ನು ಹಿಂದಟ್ಟಿದವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿಬಿಟ್ಟೆ.12ಹಗಲಿನಲ್ಲಿ ಮೇಘಸ್ತಂಭವಾಗಿಯೂ, ರಾತ್ರಿ ವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭವಾಗಿಯೂ ಅವರ ಮುಂದೆ ನೀನು ನಡೆದೆ.13ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ, ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ.14ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ, ಆಜ್ಞಾವಿಧಿನಿಯಮಗಳನ್ನೂ ಅವರಿಗೆ ಕಲಿಸಿದೆ.15ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.16ಆದರೂ ನಮ್ಮ ಪೂರ್ವಿಕರು ಗರ್ವಿಗಳಾಗಿ ಹಠಹಿಡಿದು, ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.17ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.18ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು, <ಇಸ್ರಾಯೇಲರೇ, ನಿಮ್ಮನ್ನು ಐಗುಪ್ತದಿಂದ ಕರೆದುಕೊಂಡು ಬಂದ ದೇವರು ಇದೇ> ಎಂದು ಹೇಳಿ ನಿನ್ನನ್ನು ಅಸಡ್ಡೆಮಾಡಿದಾಗಲೂ,19ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘಸ್ತಂಭವೂ, ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುತ್ತಿದ್ದ ಅಗ್ನಿಸ್ತಂಭವೂ, ಅವರನ್ನು ಬಿಟ್ಟುಹೋಗದಂತೆ ಮಾಡಿದೆ.20ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.21ನಲ್ವತ್ತು ವರ್ಷ ಅವರನ್ನು ಅರಣ್ಯದಲ್ಲಿ ಸಾಕುತ್ತಾ ಇದ್ದೆ. ಅವರಿಗೆ ಯಾವ ಕೊರತೆಯೂ ಆಗಲಿಲ್ಲ. ಅವರ ಬಟ್ಟೆಗಳು ಹರಿದುಹೋಗಲಿಲ್ಲ, ಅವರ ಕಾಲುಗಳು ನೋವಿನಿಂದ ಊದಿಕೊಳ್ಳಲಿಲ್ಲ.22ರಾಜ್ಯಗಳನ್ನೂ, ಜನಾಂಗಗಳನ್ನು ಅವರಿಗೆ ವಶಪಡಿಸಿ, ಆ ರಾಜ್ಯಗಳನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟೆ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತ್ಯಗಳನ್ನು ಸ್ವಾಧೀನಪಡಿಸಿಕೊಂಡರು.23ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸಿ, ನೀವು ಈ ದೇಶದೊಳಕ್ಕೆ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವಿರಿ ಎಂದು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದೆ.24ಅವರು ಆ ದೇಶದಲ್ಲಿ ಹೋಗಿ ಸೇರಿಕೊಂಡು ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದೆ.25ಅವರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ಸಾರವುಳ್ಳ ಭೂಮಿಯನ್ನೂ, ಸಮಸ್ತ ವಿಧವಾದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ತೋಡಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಎಣ್ಣೇಮರಗಳ ತೋಪುಗಳನ್ನೂ, ಹೆಚ್ಚಾದ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು, ಕುಡಿದು ತೃಪ್ತರಾಗಿ ಕೊಬ್ಬಿ, ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.26ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.27ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ.28ಉಪಶಮನವನ್ನು ಪಡೆದ ಮೇಲೆ ಅವರು ತಿರುಗಿ ದ್ರೋಹಿಗಳಾಗಿ ನಡೆಯುತ್ತಿರುವುದನ್ನು ನೀನು ಕಂಡು ಅವರ ಮೇಲೆ ದೊರೆತನ ನಡೆಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದೆ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪುನಃ ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿದೆ.29ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.30ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.31ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವುರಿಂದ ನಿನ್ನ ಮಹಾಕೃಪಾನುಸಾರವಾಗಿ ಅವರನ್ನು ನಾಶಮಾಡಲಿಲ್ಲ, ಕೈಬಿಡಲೂ ಇಲ್ಲ.32ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.33ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ನೀತಿಸ್ವರೂಪನೇ. ನೀನು ಸತ್ಯವನ್ನೇ ನಡಿಸಿದೆ. ನಾವಾದರೋ ದುಷ್ಟರು.34ನಮ್ಮ ಅರಸರೂ, ಪ್ರಭುಗಳೂ, ಯಾಜಕರೂ, ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ. ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಗಮನಿಸಲಿಲ್ಲ.35ಅವರು ಸ್ವರಾಜ್ಯದಲ್ಲಿದ್ದುಕೊಂಡು ನೀನು ದಯಪಾಲಿಸಿದ ಸಮೃದ್ಧಿಯನ್ನು ಅನುಭವಿಸುತ್ತಾ ನಿನ್ನ ಅನುಗ್ರಹದಿಂದ ದೊರಕಿದ ಫಲವತ್ತಾದ ವಿಶಾಲವಾದ ದೇಶದಲ್ಲಿ ವಾಸಿಸುತ್ತಾ ಇರುವಾಗ ನಿನ್ನನ್ನು ಆರಾಧಿಸದೆಯೂ ತಮ್ಮ ದುಷ್ಕೃತ್ಯಗಳನ್ನು ಬಿಡದೆಯೂ ಇದ್ದುದರಿಂದಲೇ ನಾವು ಈಗ ದಾಸರಾಗಿದ್ದೇವೆ.36ನೀನು ನಮ್ಮ ಪೂರ್ವಿಕರಿಗೆ, ಇದರ ಉತ್ಪನ್ನವನ್ನೂ, ಸಮೃದ್ಧಿಯನ್ನೂ ಅನುಭವಿಸಿರಿ ಎಂದು ಹೇಳಿ ಕೊಟ್ಟ ದೇಶದಲ್ಲೇ ನಾವು ದಾಸರಾಗಿರಬೇಕಾಗಿ ಬಂದಿದೆ.37ನಮ್ಮ ಪಾಪಗಳ ನಿಮಿತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇಮಿಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತಾ ಇದೆ. ದೈಹಿಕವಾಗಿ ನಮ್ಮ ಮೇಲೆ ಹಾಗೂ ನಮ್ಮ ಪಶುಗಳ ಮೇಲೆ ಅವರು ಮನಸ್ಸಿಗೆ ಬಂದಂತೆ ಅಧಿಕಾರ ನಡಿಸುತ್ತಿದ್ದಾರೆ. ನಾವು ಮಹಾಸಂಕಟದಲ್ಲಿದ್ದೇವೆ>> ಎಂದು ಪ್ರಾರ್ಥಿಸಿದರು.ಮತಾಸಕ್ತರ ಪ್ರತಿಜ್ಞೆ
38ಈ ಎಲ್ಲಾ ಕಾರಣಗಳನ್ನು ನಾವು ನೆನಪುಮಾಡಿಕೊಂಡು ಲೇಖನ ರೂಪವಾದ ಪ್ರತಿಜ್ಞೆಯನ್ನು ಸ್ಥಿರಮಾಡಿಕೊಂಡಿದ್ದೇವೆ. ಅದಕ್ಕೆ ನಮ್ಮ ಪ್ರಭುಗಳೂ, ಲೇವಿಯರೂ, ಯಾಜಕರೂ ಸಹಿಮಾಡಿ ಮುದ್ರೆ ಹಾಕಿರುವರು.
101ಲೇಖನ ರೂಪವಾದ ಪ್ರತಿಜ್ಞೆಗೆ ಸಹಿಮಾಡಿದವರು ಯಾರಾರೆಂದರೆ: ಹಕಲ್ಯನ ಮಗನಾದ ನೆಹೆಮೀಯನೆಂಬ ದೇಶಾಧಿಪತಿ ಹಾಗೂ ಯಾಜಕನಾದ ಚಿದ್ಕೀಯ,2ಸೆರಾಯ, ಅಜರ್ಯ, ಯೆರೆಮೀಯ,3ಪಷ್ಹೂರ್, ಅಮರ್ಯ, ಮಲ್ಕೀಯ,4ಹಟ್ಟೂಷ್, ಶೆಬನ್ಯ, ಮಲ್ಲೂಕ್,5ಹಾರಿಮ್, ಮೆರೇಮೋತ್, ಓಬದ್ಯ,6ದಾನೀಯೇಲ್, ಗಿನ್ನೆತೋನ್, ಬಾರೂಕ್,7ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,8ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರು.9ಲೇವಿಯರಲ್ಲಿ: ಅಜನ್ಯನ ಮಗನಾದ ಯೇಷೂವ, ಹೇನಾದಾದ್, ಬಿನ್ನೂಯ್, ಕದ್ಮೀಯೇಲ್ ಎಂಬುವರು.10ಇವರ ಬಂಧುಗಳಾದ ಶೆಬನ್ಯ, ಹೋದೀಯ. ಕೆಲೀಟ, ಪೆಲಾಯ, ಹಾನಾನ್,11ಮೀಕ, ರೆಹೋಬ್, ಹಷಬ್ಯ,12ಜಕ್ಕೂರ್, ಶೇರೇಬ್ಯ, ಶೆಬನ್ಯ,13ಹೋದೀಯ, ಬಾನೀ, ಬೆನೀನೂ ಎಂಬುವರು.14ಜನಪ್ರಧಾನರಲ್ಲಿ ಪರೋಷ್, ಪಹತ್ ಮೋವಾಬ್, ಏಲಾಮ್, ಜತ್ತೂ, ಬಾನೀ,15ಬುನ್ನೀ, ಅಜ್ಗಾದ್, ಬೇಬೈ16ಅದೋನೀಯ, ಬಿಗ್ವೈ, ಆದೀನ್,17ಆಟೇರ್, ಹಿಜ್ಕೀಯ, ಅಜ್ಜೂರ್,18ಹೋದೀಯ, ಹಾಷುಮ್, ಬೇಚೈ,19ಹಾರೀಫ್, ಅನಾತೋತ್, ನೇಬೈ,20ಮಗ್ಪೀಯಾಷ್, ಮೆಷುಲ್ಲಾಮ್, ಹೇಜೀರ್,21ಮೆಷೇಜಬೇಲ್, ಚಾದೋಕ್, ಯದ್ದೂವ,22ಪೆಲಟ್ಯ, ಹಾನಾನ್, ಆನಾಯ,23ಹೋಷೇಯ, ಹನನ್ಯ, ಹಷ್ಷೂಬ್,24ಹಲೋಹೇಷ್, ಪಿಲ್ಹ, ಶೋಬೇಕ್,25ರೆಹೂಮ್, ಹಷಬ್ನ, ಮಾಸೇಯ,26ಅಹೀಯ, ಹಾನಾನ್, ಆನಾನ್,27ಮಲ್ಲೂಕ್, ಹಾರಿಮ್, ಬಾನ ಎಂಬುವರು.ಒಪ್ಪಂದ
28ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಿಕೊಳ್ಳಲು ಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದರು.29ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:30ಈ ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ ಮತ್ತು ನಮ್ಮ ಗಂಡು ಮಕ್ಕಳಿಗೋಸ್ಕರ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುವುದಿಲ್ಲ.31ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.32ವರ್ಷಕ್ಕೆ ಒಂದು ಶೆಕೆಲಿನ ಮೂರನೆಯ ಒಂದು ಭಾಗವನ್ನು ದೇವಾಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ.33ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.34ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿ ಉರಿಸುವುದಕ್ಕಾಗಿ, ಪ್ರತಿ ವರ್ಷವೂ ನಿಯಮಿತ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ, ಆಯಾ ಗೋತ್ರಾನುಸಾರ ಕಟ್ಟಿಗೆ ದಾನ ಮಾಡತಕ್ಕವರು ಇಂಥವರೇ ಎಂಬುದನ್ನು ಯಾಜಕರೂ, ಲೇವಿಯರೂ, ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟು ಹಾಕಿ ಗೊತ್ತುಮಾಡಿಕೊಳ್ಳುತ್ತೇವೆ.35ನಮ್ಮ ಭೂಮಿಯ ಬೆಳೆಗಳ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿ ವರ್ಷವೂ ಯೆಹೋವನ ಆಲಯಕ್ಕೆ ತಂದುಕೊಂಡುವೆವು.36ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು.37ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು.38ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.39ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.
11ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದವರ ಪಟ್ಟಿ
1ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.2ಮತ್ತು ಸ್ವಇಚ್ಛೆಯಿಂದ ಯೆರೂಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು.3ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.4ಯೆರೂಸಲೇಮಿನಲ್ಲಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಲ್ಲಿ ಕೆಲವರು ವಾಸವಾಗಿದ್ದರು. ಯೆಹೂದ ಕುಲದವರಲ್ಲಿ: ಅತಾಯನು, ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಯನ ಮಗ; ಇವನು ಮಹಲಲೇಲನ ಮಗ, ಇವನು ಪೆರೆಚ್ ಸಂತಾನದವನು.5ಇನ್ನೊಬ್ಬನು ಮಾಸೇಯ, ಇವನು ಬಾರೂಕನ ಮಗ; ಇವನು ಕೊಲ್ಹೋಜೆಯ ಮಗ; ಇವನು ಹಜಾಯನ ಮಗ; ಇವನು ಅದಾಯನ ಮಗ; ಇವನು ಯೋಯಾರೀಬನ ಮಗ; ಇವನು ಜೆಕರ್ಯನ ಮಗ, ಇವನು ಶೇಲಹನ ಸಂತಾನದವನು.6ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರ ಆರುವತ್ತೆಂಟು ಮಂದಿ.7ಬೆನ್ಯಾಮೀನ್ ಕುಲದವರಲ್ಲಿ: ಸಲ್ಲು, ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ.8ರಣವೀರರಾದ ಗಬ್ಬೈ ಮತ್ತು ಸಲ್ಲೈ ಹಾಗು ಒಂಭೈನೂರಿಪ್ಪತ್ತೆಂಟು ಮಂದಿ.9ಜಿಕ್ರಿಯನ ಮಗನಾದ ಯೋವೇಲನು ಇವರ ನಾಯಕನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಎರಡನೆಯ ಪುರಾಧಿಕಾರಿಯಾಗಿದ್ದನು.10ಯಾಜಕರಲ್ಲಿ: ಯೋಯಾರೀಬನ ಮಗನಾದ ಯೆದಾಯ, ಮತ್ತು ಯಾಕೀನ್,11ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ, ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ, ದೇವಾಲಯದ ಅಧಿಪತಿಯೂ ಆದ ಸೆರಾಯ ಇವರು.12ಮತ್ತು ದೇವಾಲಯದ ಸೇವೆ ನಡೆಸುತ್ತಿದ್ದ ಇವರ ಬಂಧುಗಳು ಒಟ್ಟು ಎಂಟುನೂರ ಇಪ್ಪತ್ತೆರಡು ಮಂದಿ. ಇವರಲ್ಲದೆ ಅದಾಯನೆಂಬುವನು ಇನ್ನೊಬ್ಬನು. ಇವನು ಯೆರೋಹಾಮನ ಮಗ; ಇವನು ಪೆಲಲ್ಯನ ಮಗ; ಇವನು ಅಮ್ಚೀಯನ ಮಗ; ಇವನು ಜೆಕರ್ಯನ ಮಗ; ಇವನು ಪಷ್ಹೂರನ ಮಗ; ಇವನು ಮಲ್ಕೀಯನ ಮಗ.13ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಲ್ವತ್ತೆರಡು ಮಂದಿ. ಅಮಷ್ಷೈ ಎಂಬುವನು ಮತ್ತೊಬ್ಬನು. ಇವನು ಅಜರೇಲನ ಮಗ; ಇವನು ಅಹಜೈಯನ ಮಗ; ಇವನು ಮೆಷಿಲ್ಲೇಮೋತನ ಮಗ; ಇವನು ಇಮ್ಮೇರನ ಮಗ.14ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು.15ಲೇವಿಯರಲ್ಲಿ: ಹಷ್ಷೂಬನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಬುನ್ನೀ ವಂಶದವನೂ ಆದ ಶೆಮಾಯನು.16ಲೇವಿಗೋತ್ರ ಪ್ರಧಾನರಲ್ಲಿ: ದೇವಾಲಯದ ಹೊರಗಿನ ಕಾರ್ಯಗಳ ಮೇಲ್ವಿಚಾರಕನಾದ ಶಬ್ಬೆತೈ, ಯೋಜಾಬಾದ್ ಎಂಬುವವರು,17ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು,18ಪರಿಶುದ್ಧ ನಗರದಲ್ಲಿದ್ದ ಎಲ್ಲಾ ಲೇವಿಯರು ಒಟ್ಟು ಇನ್ನೂರ ಎಂಭತ್ತನಾಲ್ಕು ಮಂದಿ.19ದ್ವಾರಪಾಲಕರಲ್ಲಿ; ಅಕ್ಕೂಬ್, ಟಲ್ಮೋನರೂ ಮತ್ತು ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ ಒಟ್ಟು ನೂರ ಎಪ್ಪತ್ತೆರಡು ಮಂದಿ.20ಉಳಿದ ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸಮಾಡುತ್ತಿದ್ದರು.21ದೇವಾಲಯದ ಸೇವಕರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಚೀಹ, ಗಿಷ್ಪ ಎಂಬುವವರು ಇವರ ನಾಯಕರಾಗಿದ್ದರು.22ದೇವಾಲಯದ ಕೆಲಸದ ಸಂಬಂಧವಾಗಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯನ ಮಗನೂ, ಹಷಬ್ಯನ ಮೊಮ್ಮಗನೂ, ಮತ್ತನ್ಯನ ಮರಿಮಗನೂ, ಮೀಕನ ವಂಶದವನಾದ ಆದ ಉಜ್ಜೀಯು ಯೆರೂಸಲೇಮಿನಲ್ಲಿದ್ದ ಲೇವಿಯರ ನಾಯಕನಾಗಿದ್ದನು.23ಗಾಯಕರ ಅನುದಿನದ ಖರ್ಚಿಗಾಗಿ ಒಂದು ನಿಯಮ ಇತ್ತು.24ಮೆಷೇಜಬೇಲನ ಮಗನೂ, ಜೆರಹನ ಸಂತಾನದವನೂ, ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರ್ಯಭಾರಿಯಾಗಿದ್ದನು.25ಭೂಸ್ವಾಸ್ಥ್ಯವಿದ್ದವರು ವಾಸಿಸುತ್ತಿದ್ದ ಊರುಗಳು: ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್ ಇವುಗಳೂ ಮತ್ತು ಇವುಗಳ ಗ್ರಾಮಗಳು,26ಯೇಷೂವ, ಮೋಲಾದ, ಬೇತ್ಪೆಲೆಟ್ ಇವುಗಳೂ ಮತ್ತು ಇವುಗಳ ಗ್ರಾಮಗಳು,27ಹಚರ್ ಷೂವಾಲ್ ಹಾಗು ಬೇರ್ಷೆಬ ಇವುಗಳೂ ಮತ್ತು ಇವುಗಳ ಗ್ರಾಮಗಳು,28ಚಿಕ್ಲಗ್, ಮೆಕೋನವೂ ಇವುಗಳೂ ಮತ್ತು ಇವುಗಳ ಗ್ರಾಮಗಳು,29ಏನ್ರಿಮ್ಮೋನ್, ಚೊರ್ರ, ಯರ್ಮೂತ್ ಇವುಗಳೂ ಮತ್ತು ಇವುಗಳ ಗ್ರಾಮಗಳು,30ಜನೋಹ, ಅದುಲ್ಲಾಮ್ ಇವುಗಳ ಮತ್ತು ಇವುಗಳ ಗ್ರಾಮಗಳು ಮತ್ತು ಲಾಕೀಷ್ ಇದರ ಪ್ರಾಂತ್ಯಗಳು, ಅಜೇಕವೂ ಅದರ ಗ್ರಾಮಗಳು ಯೆಹೂದ ಕುಲದವರ ನಿವಾಸ ಸ್ಥಾನಗಳಾಗಿದ್ದವು. ಅವರು ಬೇರ್ಷೆಬದಿಂದ ಹಿನ್ನೋಮ್ ಕಣಿವೆಯವರೆಗೂ ವಾಸಮಾಡುತ್ತಿದ್ದರು.31ಬೆನ್ಯಾಮೀನ್ ಕುಲದವರು ಗೆಬ ಊರಿನಿಂದ, ಮಿಕ್ಮಾಷ್, ಅಯ್ಯಾ ಹಾಗು ಬೇತೇಲ್ ಎಂಬ ಗ್ರಾಮಗಳವರೆಗೂ ವಾಸಮಾಡುತ್ತಿದ್ದರು.32ಅನಾತೋತ್, ನೋಬ್, ಅನನ್ಯ,33ಹಾಚೋರ್, ರಾಮಾ, ಗಿತ್ತಯಿಮ್,34ಹಾದೀದ್, ಚೆಬೋಯಿಮ್, ನೆಬಲ್ಲಾಟ್,35ಲೋದ್, ಓನೋ, ಗೇಹರಾಷೀಮ್ ಎಂಬ ಗ್ರಾಮಗಳೂ ಬೆನ್ಯಾಮೀನ್ ಕುಲದವರ ನಿವಾಸ ಸ್ಥಾನಗಳಾಗಿದ್ದವು.36ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರೊಂದಿಗೂ, ಕೆಲವರು ಬೆನ್ಯಾಮೀನ್ಯರೊಂದಿಗೂ ವಾಸಮಾಡುತ್ತಿದ್ದರು.
12ಯಾಜಕರ ಮತ್ತು ಲೇವಿಯರ ಪಟ್ಟಿ
1ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವ ಇವರೊಡನೆ ಯೆಹೂದ ದೇಶಕ್ಕೆ ಬಂದ ಯಾಜಕರು ಮತ್ತು ಲೇವಿಯರು ಯಾರಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,2ಅಮರ್ಯ, ಮಲ್ಲೂಕ್, ಹಟ್ಟೂಷ್,3ಶೆಕನ್ಯ, ರೆಹುಮ್, ಮೆರೇಮೋತ್,4ಇದ್ದೋ, ಗಿನ್ನೆತೋನ್, ಅಬೀಯ,5ಮಿಯ್ಯಾಮೀನ್, ಮಾದ್ಯ, ಬಿಲ್ಗ,6ಶೆಮಾಯ, ಯೋಯಾರೀಬ್, ಯೆದಾಯ,7ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಪ್ರಧಾನರು.8ಲೇವಿಯರಲ್ಲಿ: ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ ಮತ್ತು ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಸ್ತುತಿಯ ನಾಯಕರಾಗಿದ್ದರು.9ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬುವವರು ಭಜನಸೇವೆಯಲ್ಲಿ ಇವರೆದುರಾಗಿ ನಿಂತುಕೊಳ್ಳುತ್ತಿದ್ದರು.10ಯೇಷೂವನು, ಯೋಯಾಕೀಮನನ್ನೂ, ಯೋಯಾಕೀಮನ ಎಲ್ಯಾಷೀಬನನ್ನೂ, ಎಲ್ಯಾಷೀಬನು ಯೋಯಾದನನ್ನೂ,11ಯೋಯಾದನು ಯೋನಾತಾನನನ್ನೂ, ಯೋನಾತಾನನು ಯದ್ದೂವನನ್ನೂ ಪಡೆದರು.12ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು: ಸೆರಾಯನ ಗೋತ್ರದ ಮೆರಾಯ, ಯೆರೆಮೀಯನ ಗೋತ್ರದ ಹನನ್ಯ,13ಎಜ್ರನ ಗೋತ್ರದ ಮೆಷುಲ್ಲಾಮ್, ಅಮರ್ಯನ ಗೋತ್ರದ ಯೆಹೋಹಾನಾನ್,14ಮಲ್ಲೂಕಿಯ ಗೋತ್ರದ ಯೋನಾತಾನ್, ಶೆಬನ್ಯನ ಗೋತ್ರದ ಯೋಸೇಫ್,15ಹಾರಿಮನ ಗೋತ್ರದ ಅದ್ನ, ಮೆರಾಯೋತನ್ ಗೋತ್ರದ ಹೆಲ್ಕೈ,16ಇದ್ದೋವಿನ ಗೋತ್ರದ ಜೆಕರ್ಯ, ಗಿನ್ನೆತೋನನ ಗೋತ್ರದ ಮೆಷುಲ್ಲಾಮ್,17ಅಬೀಯನ ಗೋತ್ರದ ಜಿಕ್ರೀ, ಮಿನ್ಯಾಮೀನನ ಮತ್ತು ಮೋವದ್ಯನ ಗೋತ್ರದ ಪಿಲ್ಟೈ,18ಬಿಲ್ಗಾ ಗೋತ್ರದ ಶೆಮ್ಮೂವ, ಶೆಮಾಯನ ಗೋತ್ರದ ಯೆಹೋನಾತಾನ್,19ಯೋಯಾರೀಬನ ಗೋತ್ರದ ಮತ್ತೆನೈ, ಯೆದಾಯನ ಗೋತ್ರದ ಉಜ್ಜೀ,20ಸಲ್ಲೈ ಗೋತ್ರದ ಕಲ್ಲೈ, ಆಮೋಕನ ಗೋತ್ರದ ಏಬೆರ್,21ಹಿಲ್ಕೀಯನ ಗೋತ್ರದ ಹಷಬ್ಯ, ಯೆದಾಯನ ಗೋತ್ರದ ನೆತನೇಲ್ ಇವರು.22ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಗೋತ್ರ ಪ್ರಧಾನರ ಪಟ್ಟಿಯೂ ಪಾರಸಿಯನಾದ ದಾರ್ಯಾವೆಷ ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದ್ದವು.23ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದ ವರೆಗಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲ ವೃತ್ತಾಂತವೆಂಬ ಗ್ರಂಥದಲ್ಲಿ ಬರೆದಿರುತ್ತದೆ.24ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:25ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು. ದೇವರ ಮನುಷ್ಯನಾದ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ, ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.26ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತ್ತಿದ್ದ ದ್ವಾರಪಾಲಕರು: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬುವವರು.ಪೌಳಿಗೋಡೆಯ ಪ್ರತಿಷ್ಠೆ
27ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.28ಆಗ ಯೆರೂಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗೋಸ್ಕರ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕ ಮಂಡಳಿಯವರು ಯೊರ್ದನ್ ಹೊಳೆಯ ತಗ್ಗು, ಯೆರೂಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ,29ಬೆತ್ ಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್, ಊರುಗಳಿಗೆ ಸೇರಿರುವ ಹಳ್ಳಿಗಳು ಇವುಗಳಿಂದ ಸೇರಿ ಬಂದರು.30ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ, ಊರುಬಾಗಿಲುಗಳನ್ನೂ, ಗೋಡೆಯನ್ನು ಶುದ್ಧಪಡಿಸಿದರು.31ಆನಂತರ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದು, ಆರಾಧನೆ ಮಂಡಳಿಯವರಿಗೆ ಎರಡು ದೊಡ್ಡ ಗುಂಪುಗಳಾಗಿ ಆಲ್ಲಿ ನಿಲ್ಲಬೇಕೆಂದು ಅಪ್ಪಣೆಮಾಡಿದನು. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.32ಅವರ ಹಿಂದೆ ಯೆಹೂದ ಪ್ರಭುಗಳ ಅರ್ಧ ಜನರೊಡನೆ ಹೋಷಾಯನೂ,33ತುತ್ತೂರಿ ಹಿಡಿದಿರುವ ಯಾಜಕರೊಡನೆ ಅಜರ್ಯ, ಎಜ್ರ, ಮೆಷುಲ್ಲಾಮ್,34ಯೆಹೂದ, ಬೆನ್ಯಾಮೀನ್, ಶೆಮಾಯ, ಯೆರೆಮೀಯ ಎಂಬುವರೂ35ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ, ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ, ಆದ ಜೆಕರ್ಯನೂ36ದೇವರ ಮನುಷ್ಯನಾದ ದಾವೀದನ ವಾದ್ಯಗಳನ್ನು ಹಿಡಿದಿರುವ ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ, ಹಾನಾನೀ ಎಂಬುವರೂ ಹೋದರು, ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಹೊರಟನು.37ಇವರು ಬುಗ್ಗೆ ಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನು ಅನುಸರಿಸಿ ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು.38ಅವರನ್ನು ಎದುರುಗೊಳ್ಳುವ ಹಾಗೆ ಆರಾಧನೆ ಮಂಡಳಿಯ ಎರಡನೆಯ ಗುಂಪಿನವರೂ, ನಾನೂ, ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲವಾದ ಗೋಡೆಯವರೆಗೂ39ಅಲ್ಲಿಂದ ಎಫ್ರಾಯೀಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಗೋಪುರ, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿ ಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.40ದೇವಾಲಯದ ಎರಡು ಆರಾಧನಾ ಮಂಡಳಿಯ ಗುಂಪಿನವರೂ, ನಾನೂ, ನನ್ನ ಜೊತೆಯಲ್ಲಿದ್ದ ಅರ್ಧ ಮಂದಿ ಅಧಿಕಾರಿಗಳೂ41ತುತ್ತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ, ಜೆಕರ್ಯ, ಹನನ್ಯ ಇವರೂ42ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್, ಎಂಬುವರು ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು.43ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.ದೇವಾಲಯ ಸೇವಕರ ಜೀವನಾಂಶದ ವ್ಯವಸ್ಥೆ
44ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.45ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವೆಯ ಸಂಬಧದಲ್ಲಿಯೂ ಶುದ್ಧೀಕರಣ ಸಂಬಂಧದಲ್ಲಿಯೂ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗನಾದ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರವಾಗಿ ನಡೆಯುತ್ತಿದ್ದರು.46ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಗಾಯನಮಂಡಳಿಯ ನಾಯಕರು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುವ ಕೀರ್ತನೆಗಳು ಇದ್ದವು.47ಜೆರುಬ್ಬಾಬೆಲ್ ಮತ್ತು ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲರು ಗಾಯಕರಿಗೂ ದ್ವಾರಪಾಲಕರಿಗೂ ಪ್ರತಿದಿನ ಜೀವನಾಂಶವನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಮತ್ತು ಲೇವಿಯರು ತಮ್ಮದರಲ್ಲಿಯ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.
13ನೆಹೆಮೀಯನು ಸಾಧಿಸಿದ ಇತರ ಧಾರ್ಮಿಕ ಸುಧಾರಣೆಗಳು
1ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು.2ಯಾಕೆಂದರೆ ಅವರು ಇಸ್ರಾಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು.3ಇಸ್ರಾಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ಮಿಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.4ಇದಕ್ಕಿಂತ ಮೊದಲು ಯಾಜಕನಾದ ಎಲ್ಯಾಷೀಬನು ನಮ್ಮ ದೇವಾಲಯದ ಕೊಠಡಿಗಳ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟಿದ್ದನು. ಇವನು ಟೋಬೀಯನ ಸಂಬಂಧಿಕನಾಗಿದ್ದನು.5ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.6ಬಾಬೆಲೋನಿನ ಅರಸನಾದ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅರಸನ ಬಳಿಗೆ ಹೋಗಿದ್ದೆನು. ಇದೆಲ್ಲಾ ನಡೆಯುವಾಗ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ. ಕಾಲಾಂತರದಲ್ಲಿ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು,7ಹಿಂತಿರುಗಿ ಯೆರೂಸಲೇಮಿಗೆ ಬಂದೆನು. ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವಾಲಯದ ಪ್ರಾಕಾರದೊಳಗೆ ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನೋಡಿ,8ಈ ದುಷ್ಕೃತ್ಯದ ದೆಸೆಯಿಂದ ಬಹಳವಾಗಿ ನೊಂದುಕೊಂಡು, ಟೋಬೀಯನ ಮನೆಯ ಸಾಮಾನುಗಳನ್ನು ಆ ಕೊಠಡಿಯಿಂದ ಹೊರಗೆ ಹಾಕಿಸಿದೆನು.9ಕೊಠಡಿಯನ್ನು ಶುದ್ಧಮಾಡುವುದಕ್ಕಾಗಿ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಆ ಕೊಠಡಿಯಲ್ಲಿ ಇಡಿಸಿದೆನು.10ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ, ಆರಾಧನೆ ನಡೆಸತಕ್ಕ ಲೇವಿಯರೂ, ಗಾಯಕರೂ ತಮ್ಮ ತಮ್ಮ ಭೂಸ್ವಾಸ್ಥ್ಯಗಳಿಗೆ ಹಿಂತಿರುಗಿ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.11ಇದರ ದೆಸೆಯಿಂದ ನಾನು ಅಧಿಕಾರಿಗಳನ್ನು ಗದರಿಸಿ, <<ದೇವಾಲಯವನ್ನು ಅಲಕ್ಷ್ಯ ಮಾಡಿದ್ದೇಕೆ?>> ಎಂದು ಕೇಳಿದ್ದಲ್ಲದೆ ಬಿಟ್ಟು ಹೋದವರನ್ನು ಪುನಃ ಕರೆಯಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.12ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.13ನಂತರ ಉಗ್ರಾಣಗಳ ಮೇಲ್ವಿಚಾರಣೆಗಾಗಿ ನೋಡುವುದಕ್ಕೋಸ್ಕರ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಯ ಕುಲದವನಾದ ಪೆದಾಯ ಇವರನ್ನೂ, ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ, ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇಮಿಸಿದೆನು. ಇವರೆಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರಾಗಿದ್ದರು. ತಮ್ಮ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವುದು ಇವರ ಕರ್ತವ್ಯವಾಗಿತ್ತು.14ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ.15ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.16ಇದಲ್ಲದೆ ದೇಶದಲ್ಲಿ ವಾಸಿಸುತ್ತಿದ್ದ ತೂರ್ಯರು ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್ ದಿನದಲ್ಲಿ ಯೆರೂಸಲೇಮಿನಲ್ಲೇ ಮಾರುತ್ತಿದ್ದರು.17ಆಗ ನಾನು ಯೆಹೂದದ ಶ್ರೀಮಂತರಿಗೆ, <<ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ.18ನಿಮ್ಮ ಪೂರ್ವಿಕರು ಹೀಗೆ ಮಾಡಿದರೋ? ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ, ನಮ್ಮ ಪಟ್ಟಣದ ಮೇಲೆಯೂ ಬರಮಾಡಿದ್ದನಲ್ಲವೇ? ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲರ ಮೇಲೆ ದೈವಕೋಪವನ್ನು ಹೆಚ್ಚಿಸುತ್ತೀರಿ>> ಎಂದು ಹೇಳಿ ಅವರನ್ನು ಗದರಿಸಿದೆನು.19ಇದಲ್ಲದೆ, ಸಬ್ಬತ್ ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ಕತ್ತಲಾಗುವುದಕ್ಕೆ ಮೊದಲೇ ಮುಚ್ಚಿಸಿ, ಸಬ್ಬತ್ ದಿನವು ಮುಗಿಯುವವರೆಗೂ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ, ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆನು.20ಇದರಿಂದ ವರ್ತಕರೂ, ಎಲ್ಲಾ ತರದ ದಿನನಿತ್ಯ ಬಳಕೆಯ ವಸ್ತುಗಳನ್ನು ಮಾರುವುದಕ್ಕೆ ಬಂದವರೂ, ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ಇಳಿದುಕೊಂಡರು.21ಕೊನೆಗೆ ನಾನು ಅವರಿಗೆ, <<ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಪುನಃ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು>> ಎಂದು ಗದರಿಸಲು, ಅವರು ಅಂದಿನಿಂದ ಸಬ್ಬತ್ ದಿನದಲ್ಲಿ ಪುನಃ ಬರಲೇ ಇಲ್ಲ.22ಆ ಮೇಲೆ ನಾನು ಲೇವಿಯರಿಗೆ, <<ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು>> ಎಂದು ಆಜ್ಞಾಪಿಸಿದೆನು. ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು, ನಿನ್ನ ಮಹಾಕೃಪೆಗೆ ಅನುಸಾರವಾಗಿ ನನ್ನನ್ನು ಕನಿಕರಿಸು.23ಅದೇ ಕಾಲದಲ್ಲಿ ನಾನು ಅಷ್ಡೋದ್, ಅಮ್ಮೋನಿಯ, ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಣೆ ಮಾಡಿದೆನು.24ಅವರ ಮಕ್ಕಳಲ್ಲಿ ಅರ್ಧ ಮಂದಿ ಯೂದಾಯ ಭಾಷೆಯಲ್ಲಿ ಮಾತನಾಡದೆ, ಅಷ್ಡೋದ್ಯ ಭಾಷೆಯನ್ನಾಡುತ್ತಾರೆಂದು ತಿಳಿದು ನಾನು ಕೋಪಗೊಂಡೆನು.25ಅವರನ್ನು ಶಪಿಸಿ, ಅವರಲ್ಲಿ, ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು,26ಇಂತಹ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್ ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ. ಅವನು ತನ್ನ ದೇವರಿಗೆ ಪ್ರಿಯನಾಗಿದ್ದನು. ಆದ್ದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದನು. ಆದರೂ ಅನ್ಯದೇಶದ ಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿಬಿಟ್ಟರು.27ಹೀಗಿರಲಾಗಿ ನೀವೂ ಅನ್ಯಸ್ತ್ರೀಯರನ್ನು ಮದುವೆಮಾಡಿಕೊಂಡು ಅದೇ ಘೋರವಾದ ದುಷ್ಟತ್ವವನ್ನು ಮಾಡಿ ದೇವರಿಗೆ ದ್ರೋಹಿಗಳಾಗುವುದನ್ನು ನಾವು ಒಪ್ಪಿಕೊಳ್ಳಬೇಕೋ? ಎಂದು ಅವರನ್ನು ಗದರಿಸಿ <<ಅವರ ಮಕ್ಕಳಿಗೆ ಹೆಣ್ಣನ್ನು ಕೊಡಬಾರದು, ನಿಮಗಾಗಲಿ ನಿಮ್ಮ ಮಕ್ಕಳಿಗಾಗಲಿ ಅವರಿಂದ ತರಲೂಬಾರದು>> ಎಂಬ ಧರ್ಮವಿಧಿಯನ್ನು ಕೈಕೊಳ್ಳುವುದಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿಸಿದೆನು.28ಮಹಾಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾಗಿದ್ದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.29ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ.30ನಾನು ಈ ಪ್ರಕಾರ ಅನ್ಯವಾದದ್ದನ್ನೆಲ್ಲಾ ತೆಗೆಯಿಸಿ ಅವರನ್ನು ಶುದ್ಧಪಡಿಸಿದೆನಲ್ಲದೆ, ಯಾಜಕರಲ್ಲಿಯೂ, ಲೇವಿಯರಲ್ಲಿಯೂ ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು.31ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.
ಕೀರ್ತನೆಗಳು
1ಪ್ರಥಮ ಭಾಗವು (1 – 41)
ಸನ್ಮಾರ್ಗಸ್ಥರು ಮತ್ತು ದುರ್ಮಾರ್ಗಸ್ಥರು
(ಯೆರೆ. 17:5-8; ಮತ್ತಾ. 7:13,14)
1ಯಾರು ದುಷ್ಟರ ಆಲೋಚನೆಯಂತೆ ನಡೆಯದೆ,ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ,
ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
2ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ,ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.
3ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು.ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ.
ಅದರ ಎಲೆ ಬಾಡುವುದೇ ಇಲ್ಲ.
ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.
4ದುಷ್ಟರೋ ಹಾಗಲ್ಲ;ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.
5ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ,ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ.
6ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು;ದುಷ್ಟರ ಮಾರ್ಗವೋ ನಾಶವಾಗುವುದು.
2ಯೆಹೋವನಿಂದ ಅಭಿಷೇಕಿಸಲ್ಪಟ್ಟವನ ಸರ್ವಾಧಿಪತ್ಯ
1ಅನ್ಯಜನಾಂಗಗಳು ದಂಗೆಗೆ ಏಳುವುದೂ,ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?
2ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ.ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
3<<ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ,ಬೇಡಿಗಳನ್ನು ಮುರಿದು ಬಿಸಾಡೋಣ>> ಎಂದು ಮಾತನಾಡಿಕೊಳ್ಳುತ್ತಾರಲ್ಲಾ.
4ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು;ಕರ್ತನು ಅವರನ್ನು ಪರಿಹಾಸ್ಯಮಾಡುವನು.
5ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ, 6<<ನಾನು ನೇಮಿಸಿದ ಅರಸನನ್ನುಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು>> ಎಂದು ಹೇಳುವನು.
7ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ;ಆತನು ನನಗೆ, <<ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
8ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು;ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.
9ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ;ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ>> ಎಂದು ಹೇಳಿದನು.
10ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ;ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ.
11ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ;ನಡುಗುತ್ತಾ ಉಲ್ಲಾಸಪಡಿರಿ.
12ಆತನ ಮಗನಿಗೆ ಮುದ್ದಿಡಿರಿ;ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ.
ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.
3ಶತ್ರುಬಾಧಿತನಾದ ದೈವಭಕ್ತನ ಉದಯಗೀತೆ
ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಿದ ಕೀರ್ತನೆ.
1ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ;ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ.
2ಅನೇಕರು ನನ್ನ ವಿಷಯದಲ್ಲಿ, <<ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ>> ಎಂದು ಹೇಳಿಕೊಳ್ಳುತ್ತಾರೆ. ಸೆಲಾ
3ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ;ನೀನು ನನ್ನ ಗೌರವಕ್ಕೆ ಆಧಾರನೂ,
ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.
4ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ,ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ.
ಸೆಲಾ
5ಯೆಹೋವನು ನನ್ನನ್ನು ಕಾಪಾಡುವವನು,ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು.
6ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವಸಾವಿರಾರು ವೈರಿಗಳಿಗಾದರೂ ನಾನು ಹೆದರೆನು.
7ಯೆಹೋವನೇ, ನನ್ನ ದೇವರೇ,ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ,
ಎದ್ದು ಬಂದು ನನ್ನನ್ನು ರಕ್ಷಿಸು.
8 ಜಯವು ಯೆಹೋವನಿಂದಲೇ ಉಂಟಾಗುವುದು.ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ.
ಸೆಲಾ.
4ವಿಶ್ವಾಸಯುಕ್ತ ಸಂಧ್ಯಾಕಾಲದ ಗೀತೆ
ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ.
1ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ;ಸದುತ್ತರವನ್ನು ದಯಪಾಲಿಸು.
ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ,
ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.
2ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ,ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ?
ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ?
ಸೆಲಾ
3ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ.ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.
4ಭಯಪಡಿರಿ, ಪಾಪಮಾಡಬೇಡಿರಿ;ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ.
ಸೆಲಾ
5ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ;ಯೆಹೋವನಲ್ಲಿಯೇ ಭರವಸವಿಡಿರಿ.
6<<ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?>> ಎಂದು ಅನೇಕರು ಹೇಳಿಕೊಳ್ಳುತ್ತಾರೆ.ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.
7ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.
8ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು.ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.
5ಭಕ್ತ ರಕ್ಷಕನಾದ ಯೆಹೋವನಿಗೆ ಉದಯಕೀರ್ತನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ರಂಧ್ರವಾದ್ಯದೊಡನೆ ಹಾಡತಕ್ಕ ದಾವೀದನ ಕೀರ್ತನೆ.
1ಯೆಹೋವನೇ ನನ್ನ ಮೊರೆಗೆ ಕಿವಿಗೊಡು;ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ.
2ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು;ನನ್ನ ಮೊರೆಯನ್ನು ಆಲಿಸು.
3ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು;ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ,
ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.
4ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ;ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.
5ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು;ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.
6ಸುಳ್ಳು ಹೇಳುವವರನ್ನು ನಾಶಮಾಡುವಿ;ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.
7ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು;
ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ,
ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.
8ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು;
ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.
9ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ;ಅವರು ನಾಲಿಗೆಯಿಂದ ಸವಿಮಾತನಾಡಿದರೂ,
ಅವರ ಹೃದಯವು ನಾಶಕರವಾದ ಗುಂಡಿ,
ಅವರ ಗಂಟಲು ತೆರೆದಿರುವ ಸಮಾಧಿ.
10ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು;ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು;
ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ;
ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು.
11ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು;ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು.
ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.
12ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ;ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.
6ಕಷ್ಟಪೀಡಿತನಾದ ಭಕ್ತನ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದ ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನು ರಚಿಸಿದ ಕೀರ್ತನೆ.
1ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ;ರೋಷದಿಂದ ನನ್ನನ್ನು ದಂಡಿಸಬೇಡ.
2ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ.ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.
3ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ.ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?
4ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು;ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.
5ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ;ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?
6ನಾನು ನರಳಿ ನರಳಿ ದಣಿದಿದ್ದೇನೆ;ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ.
ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.
7ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು;ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.
8ಧರ್ಮವನ್ನು ಮೀರಿ ನಡೆಯುವವರೇ,ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ;
ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
9ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ;ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.
10ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು;ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.
7ಅನ್ಯಾಯವಾದ ದೋಷಾರೋಪಣೆಗೆ ಗುರಿಯಾದ ದೇವಭಕ್ತನು ಪ್ರಾರ್ಥಿಸುವುದು
ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ ದಾವೀದನು ಯೆಹೋವನಿಗಾಗಿ ಹಾಡಿದ ಗೀತೆ.
1ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ;ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು.
2ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು,ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.
3ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ,
4ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು,ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ;
5ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ;ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ.
ಸೆಲಾ
6ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು.ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.
7ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿನೀನು ಪುನಃ ಆರೋಹಣಮಾಡು.
8ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ.ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.
9ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂಪರಿಶೋಧಿಸುವ ನೀತಿಸ್ವರೂಪನಾದ ದೇವರೇ,
ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು;
ನೀತಿವಂತರನ್ನು ದೃಢಪಡಿಸು.
10ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ;ಆತನು ಯಥಾರ್ಥರನ್ನು ಕಾಪಾಡುತ್ತಾನೆ.
11ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು;ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು.
12ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆಆತನು ತನ್ನ ಕತ್ತಿಯನ್ನು ಮಸೆಯುವನು.
ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.
13ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ.
14ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ;ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ,
ಶೂನ್ಯವನ್ನೇ ಹೆತ್ತನು ನೋಡಿರಿ.
15ಅವನು ಅಗೆದು ಅಗೆದು ಗುಂಡಿಯನ್ನು ತೋಡಿ,ಅದರೊಳಗೆ ತಾನೇ ಬಿದ್ದುಹೋದನಲ್ಲಾ.
16ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು;ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.
17ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ,ನಾನು ಆತನನ್ನು ಕೊಂಡಾಡುವೆನು.
ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.
8ದೇವರು ಅನುಗ್ರಹಿಸಿರುವ ಗೌರವಕ್ಕಾಗಿ ಆತನನ್ನು ಕೊಂಡಾಡುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು.
1ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.
2ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ,
ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ
ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.
3ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ,ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,
4ಮನುಷ್ಯನು ಎಷ್ಟು ಮಾತ್ರದವನು,ಅವನನ್ನು ನೀನು ಏಕೆ ಸ್ಮರಿಸಬೇಕು?
ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
5ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ;ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.
6ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.
7ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು,
8ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು,ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು,
ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.
9ನಮ್ಮ ಕರ್ತನಾದ ಯೆಹೋವನೇ,ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.
9ನ್ಯಾಯಸ್ಥಾಪಕನಾದ ಯೆಹೋವನನ್ನು ಕೊಂಡಾಡುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ.
1ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು;ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.
2ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು;ನಿನ್ನ ಹೆಸರನ್ನು ಕೀರ್ತಿಸುವೆನು.
3ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.
4ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ;ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ.
5ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ,ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.
6ಶತ್ರುಗಳು ನಿಶ್ಶೇಷವಾದರು;ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು.
ಅವರ ಸ್ಮರಣೆಯೇ ಇಲ್ಲವಾಯಿತು.
7ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು,ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.
8ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು;ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.
9ಯೆಹೋವನು ಕುಗ್ಗಿದವರಿಗೆ ಆಶ್ರಯವೂ,ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.
10ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರುನಿನ್ನಲ್ಲಿ ಭರವಸವಿಡುವರು;
ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
11ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ;ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.
12ಆತನು ಕುಗ್ಗಿದವರ ಮೊರೆಯನ್ನು ಮರೆಯದೆಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.
13ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ;ನನ್ನನ್ನು ಉದ್ಧರಿಸುವವನೇ, ಕನಿಕರಿಸು;
ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.
14ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು;ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.
15ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು;ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.
16ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ;ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್
ಸೆಲಾ
17ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾಪಾತಾಳಕ್ಕೆ ಇಳಿದುಹೋಗುವರು.
18ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ;ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.
19ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು.ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.
20ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು;ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ.
ಸೆಲಾ.
10ಯೆಹೋವನು ಕುಗ್ಗಿದವರನ್ನು ರಕ್ಷಿಸಬೇಕೆಂದು ಬೇಡಿಕೊಳ್ಳುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
1ಯೆಹೋವನೇ, ನೀನು ಏಕೆ ದೂರವಾಗಿ ನಿಂತಿದ್ದೀ?ಕಷ್ಟಕಾಲದಲ್ಲಿ ಏಕೆ ಮರೆಯಾಗುತ್ತೀ?
2ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ;ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.
3ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.
4ದುಷ್ಟನು ಸೊಕ್ಕಿನ ಮುಖದಿಂದ, <<ಯೆಹೋವನನ್ನು ವಿಚಾರಿಸುವುದಿಲ್ಲ>> ಎಂದು ಹೇಳಿಕೊಂಡು,ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.
5ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ;ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ
ಅದು ಅವನ ಗ್ರಹಿಕೆಗೆ ಬರುವುದಿಲ್ಲ;
ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ.
6ಅವನು, <<ನಾನು ಕದಲುವುದೇ ಇಲ್ಲ;ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ>> ಅಂದುಕೊಂಡಿದ್ದಾನೆ.
7ಅವನ ಬಾಯಿಯು ಶಾಪ, ಬಲಾತ್ಕಾರ ಮತ್ತು ವಂಚನೆಗಳಿಂದ ತುಂಬಿದೆ;ಅವನ ನಾಲಿಗೆಯ ಕೆಳಗೆ ಹಾನಿಯೂ, ನಾಶನವೂ ಇವೆ.
8ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು,ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ.
ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ.
9ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು.ಅವನು ಬಲೆಯೊಡ್ಡಿ ಕಾದಿದ್ದು, ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.
10ಕುಗ್ಗಿದವನು ಜಜ್ಜಲ್ಪಟ್ಟು ಉರುಳಿಕೊಳ್ಳುತ್ತಾನೆ,ಗತಿಯಿಲ್ಲದವನು ಅವನ ಬಲಾತ್ಕಾರದಿಂದ ಬಿದ್ದು ಹೋಗುತ್ತಾನೆ.
11ಆ ದುಷ್ಟನು ತನ್ನೊಳಗೆ, <<ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ;ಆತನು ನೋಡುವುದೇ ಇಲ್ಲ>> ಅಂದುಕೊಳ್ಳುತ್ತಾನೆ.
12ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ;ಅವನನ್ನು ರಕ್ಷಿಸುವುದಕ್ಕೆ ಕೈಚಾಚು.
13<<ದೇವರು ವಿಚಾರಿಸುವುದೇ ಇಲ್ಲ>> ಎಂದು ಹೇಳುತ್ತಾ,ದುಷ್ಟನು ನಿನ್ನನ್ನು ಏಕೆ ಅಲಕ್ಷ್ಯಮಾಡಬೇಕು?
14ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ;ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು;
ದಿಕ್ಕಿಲ್ಲದವನಿಗೆ ನೀನೇ ದಿಕ್ಕು.
15ದುಷ್ಟನ ಭುಜಬಲವನ್ನು ಮುರಿದುಹಾಕು,ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು.
16ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು;ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.
17ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ;ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.
18ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ.ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.
11ಯೆಹೋವನ ಶರಣರಿಗೆ ದುರ್ಗತಿಯಿಲ್ಲ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು.
1ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, <<ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ>> ಎಂದು ಹೇಳುವುದೇಕೆ?
2ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ,ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.
3ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು?
4ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ;ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ.
ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ;
ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.
5ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ;ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.
6ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ.ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.
7ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ.ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.
12ದುಷ್ಟಾಧಿಕಾರದಲ್ಲಿ ಭಕ್ತನು ಪ್ರಾರ್ಥಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ.
1ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ.ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.
2ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ,ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.
3ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.
4ಅವರು, <<ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ;ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?>> ಎಂದು ಹೇಳಿಕೊಳ್ಳುತ್ತಾರಲ್ಲಾ.
5ಯೆಹೋವನು, <<ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ;ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು.
ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು.
ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು>> ಎಂದು ಹೇಳುತ್ತಾನೆ.
6ಯೆಹೋವನ ಮಾತುಗಳು ಯಥಾರ್ಥವಾದವುಗಳೇ;ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.
7ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ,ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,
8ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ,ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.
13ಶತ್ರುಪೀಡಿತನ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ರಚಿಸಿದ ಕೀರ್ತನೆ.
1ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ?ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?
2ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು,ಆಲೋಚಿಸಿಕೊಳ್ಳುತ್ತಾ ಇರಬೇಕು?
ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು?
3ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು;ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.
4ನನ್ನ ಶತ್ರುವು, <<ನಾನು ಅವನನ್ನು ಜಯಿಸಿದೆನು>> ಎಂದು ಹೇಳಿಕೊಳ್ಳಬಾರದು;ವೈರಿಗಳು, <<ನನ್ನ ಎದುರಾಳಿಯು ಜಾರಿಬಿದ್ದನು>> ಎಂದು ಹಿಗ್ಗಬಾರದು.
5ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ;ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು.
6ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು. 14ದುಷ್ಟ ನಾಸ್ತಿಕರಿಂದ ತಪ್ಪಿಸಿ ಕಾಪಾಡಬೇಕೆಂಬ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು.
1ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, <<ದೇವರೇ ಇಲ್ಲ>> ಎಂದು ಅಂದುಕೊಳ್ಳುತ್ತಾರೆ;ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ.
ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
2ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ,ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
3ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ.
4ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ?ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ;
ಯೆಹೋವನನ್ನು ಸ್ಮರಿಸುವುದಿಲ್ಲ.
5ಅವರು ಫಕ್ಕನೆ ಭಯಭ್ರಾಂತರಾಗುವರು;ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.
6ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂಯೆಹೋವನು ಅವರ ಆಶ್ರಯವಲ್ಲವೇ.
7ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ.ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ,
ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು,
ಇಸ್ರಾಯೇಲರು ಹರ್ಷಿಸುವರು.
15ಯೆಹೋವನ ಸನ್ನಿಧಿಗೆ ಬರಲು ಯೋಗ್ಯರಾದವರು
ದಾವೀದನ ಕೀರ್ತನೆ.
1ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು?ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?
2ಅವನು ಸಜ್ಜನನೂ, ನೀತಿವಂತನೂ,ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.
3ಅವನು ಚಾಡಿಯನ್ನು ಹೇಳದವನೂ,ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ,
ಯಾರನ್ನೂ ನಿಂದಿಸದವನೂ ಆಗಿರಬೇಕು.
4ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ,ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ,
ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.
5ಅವನು ಸಾಲಕ್ಕೆ ಬಡ್ಡಿ ಕೇಳದವನೂ,ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು.
ಇಂಥವನು ಎಂದಿಗೂ ಕದಲುವುದಿಲ್ಲ.
16ಯೆಹೋವನ ಸೇವೆಯು ಪೂರ್ಣಾನಂದಕರವಾದದ್ದು
ದಾವೀದನ ಕಾವ್ಯ.
1ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು.
2ನಾನು ಯೆಹೋವನನ್ನು ಕುರಿತು, <<ನೀನೇ ನನ್ನ ಒಡೆಯನು;ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ>> ಎಂದು ಹೇಳುವೆನು.
3ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ,<<ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು>> ಎಂದು ಹೇಳುವೆನು.
4ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು.ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ;
ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.
5ನನ್ನ ಪಾಲೂ, ನನ್ನ ಪಾನವೂ ಯೆಹೋವನೇ,ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.
6ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು;ಅದು ನನಗೆ ಸಂತೃಪ್ತಿಕರವಾಗಿದೆ.
7ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ;ನಾನು ಆತನನ್ನು ಕೊಂಡಾಡುವೆನು.
ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.
8ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ;ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.
9ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ;ನನ್ನ ಮನವು ಉಲ್ಲಾಸಗೊಳ್ಳುತ್ತದೆ;
ನನ್ನ ಶರೀರವೂ ಸುರಕ್ಷಿತವಾಗಿರುವುದು.
10ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ;ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.
11ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ;ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ;
ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
17ಶತ್ರುಗಳಿಂದ ಕಾಪಾಡಬೇಕೆಂಬ ನಿರಪರಾಧಿಯ ಬೇಡಿಕೆ
ದಾವೀದನ ಪ್ರಾರ್ಥನೆ.
1ಯೆಹೋವನೇ, ನ್ಯಾಯವಾದುದನ್ನು ಆಲೈಸು;ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು;
ಅದು ಕಪಟವಾದ ಬಾಯಿಂದ ಬಂದದ್ದಲ್ಲ.
2ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ;ನೀನು ನೀತಿಗನುಸಾರವಾಗಿ ನೋಡುವವನಲ್ಲವೇ.
3ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ,ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ,
ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ;
ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.
4ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆನಿನ್ನ ಮಾತನ್ನೇ ಅನುಸರಿಸಿದ್ದೇನೆ.
5ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ;ನನ್ನ ಕಾಲು ಜಾರಲಿಲ್ಲ.
6ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ,ಕಿವಿಗೊಟ್ಟು ಕೇಳು.
7ಭುಜಬಲವನ್ನು ಪ್ರಯೋಗಿಸಿ,ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ,
ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.
8ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ,ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.
9ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ;ಕಣ್ಣು ಗುಡ್ಡಿನಂತೆಯೇ ಕಾಪಾಡು.
10ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ;ಅಹಂಕಾರದಿಂದ ಮಾತನಾಡುತ್ತಾರೆ.
11ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ;ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ.
12ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ,ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ.
13ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು;ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.
14ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದುನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು;
ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ.
ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.
15ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು.ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.
18ಜಯಪ್ರದನಾದ ಯೆಹೋವನ ಸ್ತುತಿ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಯೆಹೋವನ ಸೇವಕನಾದ ದಾವೀದನು ಸೌಲನಿಂದಲೂ, ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸಲ್ಪಟ್ಟಾಗ ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು.
1ನನ್ನ ಬಲವಾಗಿರುವ ಯೆಹೋವನೇ,ನಿನ್ನಲ್ಲಿಯೇ ಮಮತೆಯಿಡುತ್ತೇನೆ.
2ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು,ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು,
ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ.
3ಯೆಹೋವನು ಸ್ತೋತ್ರಕ್ಕೆ ಅರ್ಹನು;ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
4ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು;ನಾಶಪ್ರವಾಹವು ನನ್ನನ್ನು ನಡುಗಿಸಿತು.
5ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು;ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.
6ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು;ನನ್ನ ದೇವರನ್ನು ಪ್ರಾರ್ಥಿಸಿದೆನು.
ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು;
ನನ್ನ ಕೂಗು ಆತನಿಗೆ ಕೇಳಿಸಿತು.
7ಆಗ ಆತನಿಗೆ ಸಿಟ್ಟೇರಿದ್ದರಿಂದ,ಭೂಮಿಯು ಗಡಗಡನೆ ಕಂಪಿಸಿತು,
ಪರ್ವತಗಳ ಬುಡಗಳು ನಡುಗಿ ಕದಲಿದವು.
8ಆತನ ಮೂಗಿನಿಂದ ಹೊಗೆಯು ಎದ್ದು;ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು,
ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.
9ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು;ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
10ಕೆರೂಬಿವಾಹನನಾಗಿ ಹಾರಿ,ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.
11ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು,ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು.
12ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು,ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು.
13ಯೆಹೋವನು ಆಕಾಶದಲ್ಲಿ ಗುಡುಗಿದನು;ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.
14ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು;ಸಿಡಿಲುಗಳಿಂದ ಕಳವಳಗೊಳಿಸಿದನು.
15ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ,ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು.
ಭೂಮಂಡಲದ ಅಸ್ತಿವಾರಗಳು ಕಂಡುಬಂದವು.
16ಆತನು ಮೇಲಣ ಲೋಕದಿಂದ ಕೈಚಾಚಿ, ನನ್ನನ್ನು ಹಿಡಿದು,ಮಹಾಜಲರಾಶಿಗಳೊಳಗಿಂದ ಎಳೆದನು.
17ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದನನ್ನನ್ನು ಬಿಡಿಸಿ ರಕ್ಷಿಸಿದನು.
18ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು,ಆಗ ಯೆಹೋವನು ನನಗೆ ಉದ್ಧಾರಕನಾದನು.
19ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು;ನನ್ನನ್ನು ಮೆಚ್ಚಿ ರಕ್ಷಿಸಿದನು.
20ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು,ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಟ್ಟನು.
21ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ;ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.
22ನಾನು ಆತನ ನೀತಿಯ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು;ಆತನ ವಿಧಿಗಳನ್ನು ಅಲಕ್ಷ್ಯಮಾಡಲೇ ಇಲ್ಲ.
23ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು;ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
24ಆದುದರಿಂದ ನಾನು ನೀತಿವಂತನೂ, ನಿರಪರಾಧಿಯೂ ಎಂದು ನೋಡಿ,ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು.
25ನೀನು ಕೃಪೆಯುಳ್ಳವನಿಗೆ ಕೃಪಾವಂತನೂ,ದೋಷವಿಲ್ಲದವನಿಗೆ ನಿರ್ದೋಷಿಯೂ,
26ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ರನೂ ಆಗಿರುವಿ. 27ದೀನರನ್ನು ಉದ್ಧರಿಸುವವನೂ,ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?
28ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ;ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.
29ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು;ನನ್ನ ದೇವರ ಸಹಾಯದಿಂದ ಗೋಡೆಯನ್ನು ಹಾರುವೆನು .
30ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು;ಯೆಹೋವನ ವಚನವು ಶುದ್ಧವಾದದ್ದು.
ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
31ಯೆಹೋವನಲ್ಲದೆ ದೇವರು ಯಾರು?ನಮ್ಮ ದೇವರ ಹೊರತು ಶರಣನು ಎಲ್ಲಿ?
32ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ,ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ.
33ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ;ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.
34ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
35ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ.ನಿನ್ನ ಬಲಗೈ ನನಗೆ ಆಧಾರ;
ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.
36ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದನನ್ನ ಪಾದಗಳು ಕದಲುವುದಿಲ್ಲ.
37ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು;ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.
38ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು;ನನ್ನ ಪಾದದ ಕೆಳಗೆ ಬೀಳುವರು.
39ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ;ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದೀ.
40ನನ್ನ ಶತ್ರುಗಳು ನನಗೆ ಬೆನ್ನುಕೊಟ್ಟು ಓಡುವಂತೆ ಮಾಡಿದ್ದೀ;ನನ್ನ ಹಗೆಯವರನ್ನು ನಾನು ನಿರ್ಮೂಲಮಾಡುವೆನು.
41ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ;ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
42ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳನ್ನೋ ಎಂಬಂತೆಅವರನ್ನು ಪುಡಿಪುಡಿಮಾಡಿದೆನು.
ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.
43ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ;ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
44ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು;ದೇಶಾಂತರದವರು ನನ್ನ ಮುಂದೆ ಅಂಜಿ ನಡುಗುವರು.
45ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು. 46ಯೆಹೋವನು ಚೈತನ್ಯಸ್ವರೂಪನು;ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟವಾಗಲಿ.
47ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು;ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.
48ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ,ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ;
ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.
49ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು;ನಿನ್ನ ನಾಮವನ್ನು ಸಂಕೀರ್ತಿಸುವೆನು.
50ಆತನು ತಾನು ನೇಮಿಸಿದ ಅರಸನಿಗೋಸ್ಕರವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ;
ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ
ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.
19ದೇವರ ಸೃಷ್ಟಿ ಮತ್ತು ಧರ್ಮಶಾಸ್ತ್ರದ ಮಹಿಮೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
1ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ;ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.
2ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು;ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು.
3ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ. 4ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ;ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ.
ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.
5ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು.ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.
6ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ;ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
7ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು;ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು.
ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು;
ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.
8ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ;ಮನಸ್ಸನ್ನು ಹರ್ಷಪಡಿಸುತ್ತವೆ.
ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.
9ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ.ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.
10ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು.ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.
11ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ;ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.
12ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು?ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.
13ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು.ಅಂಥ ಪಾಪಗಳು ನನ್ನನ್ನು ಆಳದಿರಲಿ.
ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ.
14ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ,ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.
20ಅರಸನ ಜಯಕ್ಕಾಗಿ ಪ್ರಾರ್ಥಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
1ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ;ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.
2ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ;ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.
3ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ;ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ.
ಸೆಲಾ
4ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ;ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.
5ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು;ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು.
ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.
6ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು.
ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು,
ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.
7ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ;ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.
8ಅವರು ಬಿದ್ದುಹೋಗಿದ್ದಾರೆ;ನಾವಾದರೋ ಎದ್ದು ನಿಂತಿದ್ದೇವೆ.
9ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು;ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು.
21ಅರಸನ ವಿಜಯದಲ್ಲಿ ಯೆಹೋವನನ್ನು ಸ್ತುತಿಸುವ ಕೀರ್ತನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
1ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ;ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.
2ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ,ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ.
ಸೆಲಾ
3ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ;ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.
4ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು,ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.
5ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು;ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ.
6ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ;ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.
7ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ;ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.
8ಶತ್ರುಗಳೆಲ್ಲರು ನಿನಗೆ ಸಿಕ್ಕುವರು;ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.
9ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ.ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು;
ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.
10ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ;ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ.
11ಅವರು ತಂತ್ರೋಪಾಯಗಳನ್ನು ಕಲ್ಪಿಸಿ,ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.
12ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು,ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ.
13ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ;ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.
22ಘೋರಬಾಧೆಪಟ್ಟ ಭಕ್ತನ ಮನಃಪೂರ್ವಕ ಪ್ರಾರ್ಥನೆ
(ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಉದಯದ ಜಿಂಕೆ ಎಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ.)
(ಕೀರ್ತ. 69; 71; 102; ಯೆಶಾ. 55)
1ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ?ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?
2ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ;ರಾತ್ರಿಯಲ್ಲಿಯೂ ನನಗೆ ಉಪಶಮನವಿಲ್ಲ.
3ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ,ನೀನು ಪವಿತ್ರಸ್ವರೂಪನು.
4ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು;ನಿನ್ನನ್ನು ನಂಬಿ ಉದ್ಧಾರವಾದರು.
5ನಿನಗೆ ಮೊರೆಯಿಟ್ಟು ವಿಮುಕ್ತರಾದರು;ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.
6ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ;ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.
7ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ;ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,
8<<ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ;ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ>> ಎಂದು ಹೇಳುತ್ತಾರೆ.
9ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ.ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.
10ಹುಟ್ಟಿದಂದಿನಿಂದ ನೀನೇ ನನಗೆ ಆಧಾರ;ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.
11ನನಗೀಗ ಕಷ್ಟವು ಪ್ರಾಪ್ತವಾಗಿದೆ;ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.
12ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ;ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.
13ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ. 14ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ;ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ.
ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.
15 ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ;ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ.
ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.
16ನಾಯಿಗಳು ನನ್ನನ್ನು ಸುತ್ತಿಕೊಂಡಿವೆ;ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ.
ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.
17ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು;ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.
18ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ;ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ.
19ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ;ಬೇಗ ಬಂದು ಸಹಾಯಮಾಡು.
20ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು;ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು.
21ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು.
22ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು;ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
23ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ;ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ.
ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ.
24ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ,ಅದಕ್ಕೆ ಅಸಹ್ಯಪಡಲಿಲ್ಲ;
ತನ್ನ ಮುಖವನ್ನು ಅವನಿಗೆ ಮರೆಮಾಡದೆ,
ಅವನ ಪ್ರಾರ್ಥನೆಗೆ ಕಿವಿಗೊಟ್ಟನು.
25ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು;ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
26ದೀನರು ಉಂಡು ತೃಪ್ತರಾಗುವರು;ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು.
ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.
27ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು;ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.
28ರಾಜ್ಯವು ಯೆಹೋವನದೇ;ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು.
29ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು;ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.
30ಆತನನ್ನು ಸೇವಿಸುವವರ ಸಂತಾನದವರುಯೆಹೋವನ ಸಂತಾನದವರೆಂದು ಎಣಿಸಲ್ಪಡವರು.
31ಅವರು ಬಂದು ಆತನ ನೀತಿಯನ್ನೂ,ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.
23ಭಕ್ತರೆಂಬ ಕುರಿಗಳಿಗೆ ಒಳ್ಳೆಯ ಕುರುಬನಾದ ಯೆಹೋವನು
ದಾವೀದನ ಕೀರ್ತನೆ.
1ಯೆಹೋವನು ನನಗೆ ಕುರುಬನು; ಕೊರತೆಪಡೆನು.
2ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ;ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.
3ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.
4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;
ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
5ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ,
ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
6ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು.ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.
24ಯೆಹೋವನ ಸನ್ನಿಧಿಯಲ್ಲಿ ಸೇರತಕ್ಕವರು
ದಾವೀದನ ಕೀರ್ತನೆ.
1ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು;ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.
2ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು;ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.
3ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು?ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು?
4ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ,ಮೋಸ ಪ್ರಮಾಣಮಾಡದೆ,
ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,
5ಅವನೇ ಯೆಹೋವನಿಂದ ಶುಭವನ್ನು ಹೊಂದುವನು;ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು.
6ಇಂಥವರೇ ಆತನ ದರ್ಶನವನ್ನು ಬಯಸುವವರು.ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ.
ಸೆಲಾ
7ದ್ವಾರಗಳೇ, ಉನ್ನತವಾಗಿರ್ರಿ!ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ!
ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
8ಮಹಾಮಹಿಮೆಯುಳ್ಳ ಈ ಅರಸನು ಯಾರು?ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ,
ಯುದ್ಧವೀರನಾಗಿರುವ ಯೆಹೋವ.
9ದ್ವಾರಗಳೇ, ಉನ್ನತವಾಗಿರ್ರಿ!ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ!
ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
10ಮಹಾಮಹಿಮೆಯುಳ್ಳ ಈ ಅರಸನು ಯಾರು?ಸೇನಾಧೀಶ್ವರನಾದ ಯೆಹೋವನೇ,
ಮಹಾಮಹಿಮೆಯುಳ್ಳ ಅರಸನು ಈತನೇ.
ಸೆಲಾ.
25ಇಬ್ರಿಯ ಅಕ್ಷರಕ್ರಮಾನುಸಾರವಾದ ಪ್ರಾರ್ಥನೆ
ದಾವೀದನ ಕೀರ್ತನೆ.
1ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
2ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ,ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ.
ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.
3ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು,ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.
4ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು;ನೀನು ಒಪ್ಪುವ ದಾರಿಯನ್ನು ತೋರಿಸು.
5ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು;ನೀನೇ ನನ್ನನ್ನು ರಕ್ಷಿಸುವ ದೇವರು;
ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.
6ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ,ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.
7ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ,ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.
8ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ;ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.
9ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು;ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.
10ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ,ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.
11ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ;ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.
12ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.
13ಅವರು ಸುಖದಿಂದಲೇ ಇರುವರು;ಅವರ ಸಂತತಿಯವರು ದೇಶವನ್ನು ಅನುಭವಿಸುವರು.
14ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು;ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.
15ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ;ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು.
16ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ;ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು.
17ನನ್ನ ಮನೋವ್ಯಥೆಗಳನ್ನು ನಿವಾರಿಸು;ಸಂಕಟಗಳಿಂದ ನನ್ನನ್ನು ಬಿಡಿಸು.
18ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ,ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.
19ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ;ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ.
20ನನ್ನ ಪ್ರಾಣವನ್ನು ಕಾಪಾಡಿ ಉಳಿಸು;ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು.
21ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ;ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ.
22ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು. 26ಬಲಾತ್ಕಾರಿಗಳಿಂದ ತಪ್ಪಿಸಬೇಕೆಂಬ ಪ್ರಾರ್ಥನೆ
ದಾವೀದನ ಕೀರ್ತನೆ.
1ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು.ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ.
ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.
2ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು;ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು.
3ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ;ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.
4ನಾನು ಮೋಸಗಾರರ ಸಹವಾಸ ಮಾಡುವವನಲ್ಲ;ಕಪಟಿಗಳನ್ನು ಸೇರುವವನಲ್ಲ.
5ನನಗೆ ದುರ್ಜನರ ಕೂಟವು ಅಸಹ್ಯ;ದುಷ್ಟರ ಸಂಗವು ಬೇಕಿಲ್ಲ.
6ಯೆಹೋವನೇ, ನಾನು ನಿರ್ದೋಷಿ ಎಂದು,ಕೈಗಳನ್ನು ತೊಳೆದುಕೊಂಡವನಾಗಿ,
7ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ,ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.
8ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ;ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.
9ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ;ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.
10ಅವರ ಕೈಗಳು ಬಲಾತ್ಕಾರ ನಡೆಸುತ್ತವೆ;ಅವರ ಬಲಗೈ ಲಂಚದಿಂದ ತುಂಬಿದೆ.
11ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು;ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.
12ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ;ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು.
27ಗಂಡಾಂತರದಲ್ಲಿ ಭಕ್ತನ ನಂಬಿಕೆ
ದಾವೀದನ ಕೀರ್ತನೆ.
1ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;ನಾನು ಯಾರಿಗೆ ಭಯಪಟ್ಟೆನು?
ಯೆಹೋವನು ನನ್ನ ಪ್ರಾಣದ ಆಧಾರವು;
ನಾನು ಯಾರಿಗೆ ಹೆದರೇನು?
2ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳುನನ್ನನ್ನು ನುಂಗಿಬಿಡಬೇಕೆಂದು ಬಂದು,
ತಾವೇ ನೆಲಕ್ಕೆ ಬಿದ್ದುಹೋದರು.
3ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ;ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ,
ಭರವಸವುಳ್ಳವನಾಗಿಯೇ ಇರುವೆನು.
4ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ,ಆತನ ಪ್ರಸನ್ನತೆಯನ್ನು ನೋಡುವುದಕ್ಕೂ,
ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ
ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು
ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
5ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು;ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು;
ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.
6ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ,ನನ್ನ ತಲೆ ಎತ್ತಲ್ಪಟ್ಟಿರುವುದು;
ನಾನು ಯೆಹೋವನ ಗುಡಾರದಲ್ಲಿ,
ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು.
ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.
7ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ;ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು.
8<<ನನ್ನ ಸಾನ್ನಿಧ್ಯಕ್ಕೆ ಬಾ>> ಎಂಬ ನಿನ್ನ ಮಾತಿಗೆ,ನಾನು, <<ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು>> ಎಂದು ಉತ್ತರಕೊಟ್ಟೆನು.
9ನನಗೆ ವಿಮುಖನಾಗಿರಬೇಡ;ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ.
ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ;
ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ.
10ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು;ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.
11ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು;ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು.
12ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ;ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.
13ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನುಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ.
14ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು;ನಿನ್ನ ಹೃದಯವು ಧೈರ್ಯದಿಂದಿರಲಿ;
ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
28ಭಕ್ತನ ಸ್ತುತಿ
ದಾವೀದನ ಕೀರ್ತನೆ.
1ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ;ಕೇಳದೆ ಇರಬೇಡ.
ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.
2ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ;
ನನ್ನ ವಿಜ್ಞಾಪನೆಯನ್ನು ಲಾಲಿಸು.
3ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂನನ್ನನ್ನೂ ಎಳೆದುಕೊಂಡು ಹೋಗಬೇಡ.
ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ,
ಒಳಗೆ ಕೇಡಾಗಲಿ ಎಂದು ಯೋಚಿಸುವವರು.
4ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು;ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.
5ಅವರು ಯೆಹೋವನ ಕಾರ್ಯಗಳನ್ನೂ ಮತ್ತುಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು;
ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ.
6ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ;ಆತನಿಗೆ ಸ್ತೋತ್ರವಾಗಲಿ.
7ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ;ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು.
ಆದಕಾರಣ ನನ್ನ ಹೃದಯವು ಹರ್ಷಿಸುವುದು;
ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
8ಯೆಹೋವನು ತನ್ನ ಜನರಿಗೆ ಬಲವೂ,ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.
9ಯೆಹೋವನೇ, ನಿನ್ನ ಜನರನ್ನು ರಕ್ಷಿಸು;ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು.
ನೀನು ಅವರ ಕುರುಬನಾಗಿರು;
ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.
29ಮೇಘಮಂಡಲದಲ್ಲಿ ಕಾಣಿಸುವ ಯೆಹೋವನ ಮಹಿಮೆ
ದಾವೀದನ ಕೀರ್ತನೆ.
(ಯೆರೆ. 10:13; ಯೆಶಾ. 30:30)
1ದೇವದೂತರುಗಳಿರಾ, ಪರಮಪ್ರಭಾವವು,ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.
2ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ;ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.
3ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ;ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ;
ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.
4ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು,ಎಷ್ಟೋ ಗಂಭೀರವಾದದ್ದು.
5ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ;ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.
6ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವುಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ.
7ಯೆಹೋವನ ಗರ್ಜನೆಗೆ ಮಿಂಚುಗಳುಥಳಥಳನೆ ಹೊಳೆಯುತ್ತವೆ.
8ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ;ಕಾದೇಶ್ ಅರಣ್ಯವು ಕಂಪಿಸುತ್ತದೆ.
9 ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ;ಕಾಡಿನ ಮರಗಳು ಬರಿದಾಗುತ್ತವೆ.
ಆಗ ಆತನ ಮಂದಿರದಲ್ಲಿರುವವರೆಲ್ಲರು, <<ಎಷ್ಟೋ ಪ್ರಭಾವ!>> ಎನ್ನುತ್ತಾರೆ.
10ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು;ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.
11ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು;ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.
30ಅಪಾಯದಿಂದ ತಪ್ಪಿಸಲ್ಪಟ್ಟವರು ಯೆಹೋವನನ್ನು ಕೊಂಡಾಡುವುದು
ದಾವೀದನ ಕೀರ್ತನೆ, ದೇವಾಲಯದ ಪ್ರತಿಷ್ಠೆಯಲ್ಲಿ ಹಾಡತಕ್ಕದ್ದು.
(ಕೀರ್ತ. 6; ಯೋಹಾ. 10:22)
1ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ,ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.
2ಯೆಹೋವನೇ, ನನ್ನ ದೇವರೇ,ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.
3ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ;ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ.
4ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ;ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
5ಆತನ ಕೋಪವು ಕ್ಷಣಮಾತ್ರವೇ;ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು;
ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ,
ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
6ನಾನಂತೂ ಸುಖದಿಂದಿದ್ದಾಗ, <<ನಾನು ಎಂದಿಗೂ ಕದಲುವುದಿಲ್ಲ>>ಎಂದು ಹೇಳಿಕೊಂಡಿದ್ದೆನು.
7ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ.ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು.
8ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ, 9<<ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು?ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?
10ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು;ಯೆಹೋವನೇ, ನನ್ನ ಸಹಾಯಕ್ಕೆ ಬಾ>> ಎಂದು ಹೇಳಿದೆನು.
11ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ;ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು,
ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.
12ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು;ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.
31ಕಷ್ಟದಲ್ಲಿರುವವರ ವಿಶ್ವಾಸದ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
1ಯೆಹೋವನೇ, ನಿನ್ನ ಮೊರೆಹೊಕ್ಕಿದ್ದೇನೆ;ನನ್ನನ್ನು ಎಂದಿಗೂ ಅವಮಾನಕ್ಕೆ ಗುರಿಪಡಿಸಬೇಡ.
ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು.
2ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು;ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು.
3ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ;ಆದುದರಿಂದ ನಿನ್ನ ಹೆಸರಿನ ನಿಮಿತ್ತ ದಾರಿತೋರಿಸಿ ನನ್ನನ್ನು ನಡೆಸು.
4ಶತ್ರುಗಳು ನನಗೆ ರಹಸ್ಯವಾಗಿ ಹಾಕಿದ ಬಲೆಯೊಳಗೆಸಿಕ್ಕಿಬೀಳದಂತೆ ನನ್ನನ್ನು ಕಾಪಾಡು;
5ನೀನೇ ನನಗೆ ಆಧಾರವಲ್ಲವೇ;ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ.
ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.
6ವ್ಯರ್ಥವಾದ ವಿಗ್ರಹಗಳನ್ನೂ ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ;ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.
7ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು;ನಾನು ಕುಗ್ಗಿಹೋಗಿರುವುದನ್ನು ನೋಡಿ,
ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ.
8ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ;ನಿರಾತಂಕ ಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.
9ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ.ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು.
10ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ, ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ;ನನ್ನ ಸಂಕಟಗಳಿಂದ ನನ್ನ ಶಕ್ತಿಯು ಕುಂದಿಹೋಗಿದೆ;
ನನ್ನ ಎಲುಬುಗಳು ಸವೆದುಹೋಗಿವೆ.
11ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು;ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ.
ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು;
ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.
12ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು;ಒಡೆದ ಬೋಕಿಯಂತಿದ್ದೇನೆ.
13ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ;ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ;
ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.
14ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ;ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ.
15ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ;ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.
16ನಿನ್ನ ಸೇವಕನನ್ನು ಪ್ರಸನ್ನಮುಖದಿಂದ ನೋಡು;ಪ್ರೀತಿಯಿಂದ ನನ್ನನ್ನು ರಕ್ಷಿಸು.
17ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ.ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ.
18ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.
19ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ,ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ
ಎಷ್ಟೋ ವಿಶೇಷವಾಗಿವೆ.
20ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ;
ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ.
21ಮುತ್ತಿಗೆ ಹಾಕಲ್ಪಟ್ಟಿರುವ ನಗರದಲ್ಲಿದ್ದ ನನಗೆ,ತನ್ನ ಕೃಪೆಯನ್ನು ಆಶ್ಚರ್ಯಕರವಾಗಿ ತೋರಿಸಿದ ಯೆಹೋವನಿಗೆ ಸ್ತೋತ್ರ.
22ನಾನಂತೂ ಭಯಭ್ರಾಂತನಾಗಿ, <<ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು>> ಎಂದು ಅಂದುಕೊಂಡೆನು;ಆದರೂ ನಾನು ಮೊರೆಯಿಡಲು ನೀನು ಕೇಳಿದಿ.
23ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ.ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ;
ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿತೀರಿಸುತ್ತಾನೆ.
24ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ;ನಿಮ್ಮ ಹೃದಯವು ಧೈರ್ಯದಿಂದಿರಲಿ.
32ಪಾಪಪರಿಹಾರ ಮತ್ತು ನಂಬಿಕೆಯಿಂದ ಉಂಟಾಗುವ ಭಾಗ್ಯ
ದಾವೀದನ ಪದ್ಯ.
1ಯಾರ ದ್ರೋಹವು ಪರಿಹಾರವಾಗಿದೆಯೋ,ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.
2ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ?ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು.
3ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ,ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.
4ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು;ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು.
ಸೆಲಾ
5ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡುನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು.
ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ.
ಸೆಲಾ
6ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ;ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.
7ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ;ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ.
ಸೆಲಾ
8ಯೆಹೋವನು, <<ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು;ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು>> ಎಂದು ಅನ್ನುತ್ತಾನಲ್ಲಾ.
9ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾಹೇಸರಗತ್ತೆಯಂತಾಗಲಿ ಇರಬೇಡಿರಿ;
ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ.
10ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು;ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.
11ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ;ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.
33ರಕ್ಷಕನನ್ನು ಕೀರ್ತಿಸುವ ಭಕ್ತ
1ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ;ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ.
2ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ;ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ.
3ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ;ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.
4ಯೆಹೋವನ ವಚನವು ಯಥಾರ್ಥವಾದದ್ದು;ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ.
5ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು;ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.
6ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು;ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.
7ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ;ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ.
8ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ;ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ.
9ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು;ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.
10ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ;ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.
11ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು;ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.
12ಯಾರಿಗೆ ಯೆಹೋವನೇ ದೇವರಾಗಿದ್ದಾನೋ,ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.
13ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;
14ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.
15ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ,ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ.
16ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ;ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.
17ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ;ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.
18ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ;ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.
19ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು;ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.
20ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ;ನಮ್ಮ ಸಹಾಯವೂ, ಗುರಾಣಿಯೂ ಆತನೇ.
21ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು;ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.
22ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ;ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
34ಯೆಹೋವನು ಸದಾ ಭಕ್ತಪಾಲಕನೆಂದು ವರ್ಣಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ.
1ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು;ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.
2ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು;ಇದನ್ನು ದೀನರು ಕೇಳಿ ಸಂತೋಷಿಸುವರು.
3ನನ್ನೊಡನೆ ಯೆಹೋವನನ್ನು ಕೊಂಡಾಡಿರಿ;ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.
4ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು,ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.
5ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು;ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ.
6ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು,ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.
7ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು,ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
8ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ;ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.
9ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ;ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.
10ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು;ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.
11ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ;ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.
12ದೀರ್ಘಾಯುಷ್ಯವು ಬೇಕೋ?ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?
13ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ;ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.
14ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು;ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
15ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ;ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
16ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು;ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.
17ಯೆಹೋವನು ನೀತಿವಂತರ ಕೂಗನ್ನು ಕೇಳಿ,ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
18ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ;ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
19ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ,ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
20ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ;ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
21ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು;ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.
22ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ.ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.
35ವೈರಿಗಳಿಂದ ಬಿಡಿಸಬೇಕೆಂಬ ವಿಜ್ಞಾಪನೆ
ದಾವೀದನ ಕೀರ್ತನೆ.
(ಕೀರ್ತ. 7)
1ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು;ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು.
2ಖೇಡ್ಯ ಮತ್ತು ಗುರಾಣಿಯನ್ನು ಹಿಡಿದುಕೊಂಡು,ನನಗೆ ಸಹಾಯಕನಾಗಿ ನಿಲ್ಲು.
3ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು,ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು;
<<ನಾನೇ ನಿನ್ನ ರಕ್ಷಣೆ>> ಎಂದು ಅಭಯಕೊಡು.
4ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ;ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.
5ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ;ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ.
6ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿಯೆಹೋವನ ದೂತನು ಅವರನ್ನು ಹಿಂದಟ್ಟಲಿ.
7ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ;ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.
8ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ;ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ.
ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.
9ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು;ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು.
10ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ,ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ,
<<ನಿನಗೆ ಸಮಾನರು ಯಾರಿದ್ದಾರೆ?>> ಎಂದು ನನ್ನ ಎಲುಬುಗಳೆಲ್ಲಾ ಹೇಳುವವು.
11ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ;ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.
12ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ;ನಾನು ದಿಕ್ಕಿಲ್ಲದವನಾದೆನು.
13ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು;ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು.
ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.
14ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು;ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು.
15ಆದರೂ ನನಗೆ ಆಪತ್ತು ಬಂದಾಗ,ಅವರು ಸಂತೋಷಿಸುತ್ತಾ ಕೂಡಿಕೊಂಡರು;
ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು,
ಸೂರೆ ಮಾಡುವುದನ್ನು ಬಿಡಲೇ ಇಲ್ಲ.
16ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ,ನನ್ನ ಮೇಲೆ ಹಲ್ಲುಕಡಿಯುತ್ತಾರೆ.
17ಕರ್ತನೇ, ಇನ್ನೆಷ್ಟರ ವರೆಗೆ ಸುಮ್ಮನೆ ನೋಡುತ್ತಾ ಇರುವಿ?ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು;
ನನ್ನ ಪರಮಪ್ರಿಯ ಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು.
18ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು;ಬಹುಜನರ ಮುಂದೆ ಸ್ತುತಿಸುವೆನು.
19ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ;ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.
20ಅವರ ಮಾತುಗಳು ಸಮಾಧಾನಕರವಾದವುಗಳಲ್ಲ;ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.
21ಅವರು ನನ್ನನ್ನು ನೋಡಿ ಬಾಯಿಕಿಸಿದು, <<ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ>> ಎಂದು ಅನ್ನುತ್ತಾರೆ.
22ಯೆಹೋವನೇ, ನೀನೇ ನೋಡಿದಿಯಲ್ಲವೇ;ಸುಮ್ಮನಿರಬೇಡ;
ನನ್ನ ಒಡೆಯನೇ, ನನ್ನಿಂದ ದೂರವಾಗಿರುವುದೇಕೆ?
23ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು;ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು.
24ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು;ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು.
25ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.
26ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ;ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು,
ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.
27ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರುಆನಂದದೊಡನೆ ಜಯಧ್ವನಿಮಾಡಲಿ;
ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ.
28ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು.
36ದುಷ್ಟರ ದುರ್ಲಕ್ಷಣ ಮತ್ತು ದೇವರ ಮಹಾಪ್ರೀತಿ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆಹೋವನ ಸೇವಕನಾದ ದಾವೀದನ ಕೀರ್ತನೆ.
1ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.
2ಅದು ಅವನನ್ನು ವಂಚಿಸಿ, <<ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತುನಿನಗೆ ಕೇಡು ತರುವುದಿಲ್ಲ>> ಎಂದು ಊದಿಬಿಡುತ್ತದೆ.
3ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ;ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.
4ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು;ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.
5ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ;ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.
6ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ,ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ;
ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.
7ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು;ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.
8ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ;ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.
9ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ;ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.
10ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು;ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.
11ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ;ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು.
12ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ. 37ಸದ್ಭಕ್ತರು ನಂಬಿಕೆಯಿಂದಲೇ ಜೀವಿಸಬೇಕೆಂದು ಬೋಧಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
ದಾವೀದನ ಕೀರ್ತನೆ.
(ಕೀರ್ತ. 39; 73)
1ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ;ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.
2ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು;ಹಸಿರು ಸಸಿಯಂತೆ ಬಾಡಿಹೋಗುವರು.
3ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು;ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.
4ನೀನು ಯೆಹೋವನಲ್ಲಿ ಸಂತೋಷಿಸು;ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
5ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು;ಆತನೇ ಅದನ್ನು ಸಾಗಿಸುವನು.
6ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ,ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.
7ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು;ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
8ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು.ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
9ಕೆಡುಕರು ತೆಗೆದುಹಾಕಲ್ಪಡುವರು;ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.
10ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು;ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ.
11ಆದರೆ ದೀನರು ದೇಶವನ್ನು ಅನುಭವಿಸುವರು;ಅವರು ಮಹಾಸೌಖ್ಯದಿಂದ ಆನಂದಿಸುವರು.
12ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ;ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.
13ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ. 14ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ;ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.
15ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು;ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;
16ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.
17ದುಷ್ಟರ ತೋಳುಗಳು ಮುರಿದುಹೋಗುವವು;ನೀತಿವಂತರನ್ನು ಯೆಹೋವನೇ ಉದ್ಧರಿಸುವನು.
18ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ;ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.
19ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ;ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.
20ದುಷ್ಟರೋ ನಾಶವಾಗಿ ಹೋಗುವರು;ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು.
ಅವರು ಹಬೆಯಂತೆ ತೋರಿ ಅಡಗಿಹೋಗುವರು.
21ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು;ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.
22ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು;ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.
23ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ,ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
24ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ;ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.
25ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ;ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ,
ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.
26ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ;ಅವನ ಸಂತತಿಯವರು ಆಶೀರ್ವಾದ ಹೊಂದುವರು.
27ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು;ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ.
28ಯೆಹೋವನು ನ್ಯಾಯವನ್ನು ಮೆಚ್ಚುವವನು;ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು.
ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
29ನೀತಿವಂತರೋ ದೇಶವನ್ನು ಅನುಭವಿಸುವವರಾಗಿ,ಅದರಲ್ಲಿ ಶಾಶ್ವತವಾಗಿ ವಾಸಿಸುವರು.
30ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ,ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
31ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು;ಅವನು ಜಾರುವುದೇ ಇಲ್ಲ.
32ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.
33ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ;ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ.
34ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು;ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು;
ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.
35ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.
36ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ,ಅವನು ಇಲ್ಲದೆ ಹೋಗಿದ್ದನು,
ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.
37ಒಳ್ಳೇ ನಡತೆಯುಳ್ಳವನನ್ನು ನೋಡು,ಯಥಾರ್ಥನನ್ನು ಲಕ್ಷಿಸು;
ಶಾಂತನಿಗೆ ಸಂತಾನವೃದ್ಧಿ ಆಗುವುದು.
38ದ್ರೋಹಿಗಳೆಲ್ಲರೂ ನಾಶವಾಗುವರು;ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು.
39ನೀತಿವಂತರ ರಕ್ಷಣೆ ಯೆಹೋವನಿಂದಲೇ;ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.
40ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು;ಅವರು ಆತನ ಆಶ್ರಿತರಾದುದರಿಂದ,
ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.
38ದುರವಸ್ಥೆಯಲ್ಲಿರುವ ಭಕ್ತನು ದೇವರ ಸಹಾಯವನ್ನು ಬೇಡಿಕೊಳ್ಳುವುದು
ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು.
(ಕೀರ್ತ. 6; ಪ್ರಲಾ. 3; ಯಾಜ. 2:2; 6:15; 24:7,8)
1ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ;ರೋಷದಿಂದ ನನ್ನನ್ನು ದಂಡಿಸಬೇಡ.
2ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ;ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ.
3ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ;ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.
4ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ;ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.
5ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು,ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ.
6ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ;ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ.
7ನನ್ನ ಸೊಂಟಕ್ಕೆ ಉರಿಬಡಿದಂತಿದೆ;ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ.
8ನನಗೆ ಜೋಮುಹಿಡಿದಂತಿದೆ;ಬಹಳ ಮನಗುಂದಿದವನಾದೆನು.
ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.
9ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು;ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.
10ನನ್ನ ಹೃದಯವು ಬಡಿದುಕೊಳ್ಳುತ್ತಿದೆ;ನನ್ನ ಚೈತನ್ಯವು ಕುಗ್ಗಿಹೋಯಿತು;
ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು.
11ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು,ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ;
ನನ್ನ ಬಂಧುಗಳು ದೂರ ನಿಲ್ಲುತ್ತಾರೆ.
12ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ;ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು,
ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.
13ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ;ಮೂಕನಂತೆ ಬಾಯಿ ತೆರೆಯುವುದೇ ಇಲ್ಲ.
14ನಾನು ಕಿವಿ ಕೇಳಿಸದವನಂತೆಯೂ,ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು.
15ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ;ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು.
16<<ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು;ನಾನು ಜಾರಿಬಿದ್ದರೆ ಹಿಗ್ಗಬಾರದು>> ಅಂದುಕೊಂಡೆನು.
17ನನಗೆ ಆಪತ್ತೇ ಸಿದ್ಧವಾಗಿದೆ;ಯಾವಾಗಲೂ ನನಗೆ ಸಂಕಟವಿದೆ.
18ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ;ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು.
19ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ;ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ.
20ನಾನು ಒಳ್ಳೆಯದನ್ನು ಅನುಸರಿಸುವುದರಿಂದ,ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು.
21ಯೆಹೋವನೇ, ಕೈ ಬಿಡಬೇಡ;ನನ್ನ ದೇವರೇ, ದೂರವಾಗಿರಬೇಡ.
22ನನ್ನ ಕರ್ತನೇ, ನನ್ನ ರಕ್ಷಕನೇ,ಬೇಗ ಬಂದು ಸಹಾಯಮಾಡು.
39ಮನುಷ್ಯನ ಅಸ್ಥಿರತೆಯನ್ನು ದೇವರ ಮುಂದೆ ಅರಿಕೆಮಾಡುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದೂತೂನನ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಕೀರ್ತನೆ.
1<<ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು,ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು>> ಅಂದುಕೊಂಡೆನು.
2ನಾನು ಮೌನವಾಗಿದ್ದೆನು;ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು;
ಆದರೆ ನನ್ನ ಸಂಕಟವು ಹೆಚ್ಚಿತು.
3ನನ್ನ ಹೃದಯವು ಆತಂಕದಿಂದ ಕೂಡಿತ್ತು;ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು.
ಆಗ ನಾನು ಬಾಯಿ ಬಿಟ್ಟು,
4<<ಯೆಹೋವನೇ, ನನಗೆ ಅವಸಾನವುಂಟೆಂದೂ,ನನ್ನ ಜೀವಮಾನವು ಅತ್ಯಲ್ಪವೆಂದೂ,
ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು.
5ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ;ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ>> ಅಂದೆನು.
ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ.
ಸೆಲಾ
6ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು;ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು;
ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ,
ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.
7<<ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವುದಕ್ಕೆ ಕಾದುಕೊಳ್ಳಲಿ?ನೀನೇ ನನ್ನ ನಿರೀಕ್ಷೆ.
8ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡುಗಡೆಮಾಡು;ಮೂರ್ಖರ ನಿಂದೆಗೆ ಗುರಿಮಾಡಬೇಡ.
9ನೀನೇ ಇದನ್ನು ಬರಮಾಡಿದ್ದರಿಂದನಾನು ಏನೂ ಹೇಳದೆ ಮೌನವಾಗಿರುವೆನು.
10ನಿನ್ನ ದಂಡನೆಯನ್ನು ತೊಲಗಿಸು;ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.
11ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ,ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ.
ಮನುಷ್ಯನೆಂಬವನು ಬರಿ ಉಸಿರೇ.
ಸೆಲಾ
12ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು;ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ.
ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ,
ಪರದೇಶದವನೂ ಆಗಿದ್ದೇನಲ್ಲಾ.
13ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು,ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು
ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.>>
40ರಕ್ಷಣೆಗಾಗಿ ಪ್ರಾರ್ಥಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
1ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು;ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.
2ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು;ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ,
ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
3ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ;ಅದು ನಮ್ಮ ದೇವರ ಸ್ತೋತ್ರವೇ.
ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು
ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.
4ಯಾರು ಅಹಂಕಾರಿಗಳ ಜೊತೆಯಲ್ಲಿಯೂ,ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ,
ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು.
5ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು?ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ,
ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ;
ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ;
ಅವು ಅಸಂಖ್ಯಾತವಾಗಿವೆ.
6ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ;ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ.
ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
7ಆಗ ನಾನು, <<ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ.
8ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು;ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ>> ಅಂದೆನು.
9ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು,ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು;
ಯೆಹೋವನೇ, ನೀನೇ ಬಲ್ಲೆ.
10ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ;ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು;
ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.
11ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ;ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.
12ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ;ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ,
ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ,
ನಾನು ಎದೆಗುಂದಿ ಹೋದೆನು.
13ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು;ಯೆಹೋವನೇ, ಬೇಗನೆ ಬಂದು ಸಹಾಯಮಾಡು.
14ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು,ಆಶಾಭಂಗಪಟ್ಟು ಅವಮಾನಹೊಂದಲಿ;
ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.
15ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು,ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ.
16ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ;ನಿನ್ನ ಜಯದಲ್ಲಿ ಆನಂದಿಸುವವರು, <<ಯೆಹೋವನು ಮಹೋನ್ನತನು>> ಎಂದು ಯಾವಾಗಲೂ ಹೇಳುವವರಾಗಲಿ.
17ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ;ಕರ್ತನೇ ನನ್ನ ಹಿತಚಿಂತಕನು.
ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ;
ತಡಮಾಡಬೇಡ.
41ರೋಗ ಮತ್ತು ಶತ್ರುಬಾಧಿತನ ಮೊರೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
1ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು;ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.
2ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು;ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು;
ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!
3ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ,ಯೆಹೋವನು ಅವನನ್ನು ಉದ್ಧರಿಸುವನು;
ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ.
4ನಾನಂತೂ, <<ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ;ನನ್ನನ್ನು ಕರುಣಿಸಿ ಸ್ವಸ್ಥಮಾಡು>> ಅಂದೆನು.
5ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, <<ಅವನು ಯಾವಾಗ ಸತ್ತಾನು?ಅವನ ಹೆಸರು ಯಾವಾಗ ಇಲ್ಲದೆ ಹೋದೀತು?>> ಎಂದು ಹೇಳಿಕೊಳ್ಳುತ್ತಾರೆ.
6ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು;ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ.
7ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ.
8<<ಅವನನ್ನು ಅಸಾಧ್ಯರೋಗ ಹಿಡಿದಿದೆ;ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ>> ಎಂದು ಹೇಳಿಕೊಳ್ಳುತ್ತಾರೆ.
9ನಾನು ಯಾರನ್ನು ನಂಬಿದ್ದೆನೋ,ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ,
ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.
10ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು;ಆಗ ನಾನು ಅವರಿಗೆ ಮುಯ್ಯಿತೀರಿಸುವೆನು.
11ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.
12ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ,ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.
13ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.
42ದ್ವಿತೀಯ ಭಾಗವು 42 - 72
ದೇಶಾಂತರದಲ್ಲಿರುವ ಭಕ್ತನು ದೇವದರ್ಶನಕ್ಕಾಗಿ ಹಂಬಲಿಸುವುದು. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ.
1ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ,ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.
2ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ;ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?
3<<ನಿನ್ನ ದೇವರು ಎಲ್ಲಿ?>> ಎಂದು ಜನರುಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ,
ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.
4ನಾನು ಭಜನೋತ್ಸವದಲ್ಲಿ ಸೇರಿ,ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ,
ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು,
ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.
5ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು?ಹೀಗೆ ವ್ಯಥೆಪಡುವುದೇಕೆ?
ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ.
ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
6ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ;ಆದುದರಿಂದ ಯೊರ್ದನ್ ಹೊಳೆಯ ದೇಶ,
ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.
7ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವುಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು.
ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು
ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ.
8ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು;ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು.
ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.
9ನಾನು ನನ್ನ ಶರಣನಿಗೆ, <<ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ?ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?>> ಎಂದು ಮೊರೆಯಿಡುವೆನು.
10ನನ್ನ ವಿರೋಧಿಗಳು, <<ನಿನ್ನ ದೇವರು ಎಲ್ಲಿ?>> ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.
11ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು?ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು;
ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ;
ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
431ದೇವರೇ, ನ್ಯಾಯವನ್ನು ತೀರಿಸು;ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು,
ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.
2ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ;ಏಕೆ ನನ್ನನ್ನು ತಳ್ಳಿಬಿಟ್ಟೆ?
ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?
3ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು;ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ.
4ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ,ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ,
ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
5ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ?ದೇವರನ್ನು ನಿರೀಕ್ಷಿಸು;
ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ;
ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
44ನಿರಂತರ ರಕ್ಷಣೆಗಾಗಿ ಪ್ರಾರ್ಥನೆ
1 ಪ್ರಧಾನಗಾಯಕನ ಕೀರ್ತನಸಂಹಗ್ರದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ.
(ಕೀರ್ತ. 79)
1ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ,ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ;
ಅವರೇ ನಮಗೆ ತಿಳಿಸಿದರು.
2ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ,ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ;
ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.
3ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ;ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು;
ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.
4 ದೇವರೇ, ನೀನೇ ನನ್ನ ಅರಸನು;ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.
5ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು;ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು.
6ನಾನು ನನ್ನ ಬಿಲ್ಲಿನಲ್ಲಿ ಭರವಸವಿಡುವುದಿಲ್ಲ;ಇಲ್ಲವೇ ನನ್ನ ಕತ್ತಿಯು ನನ್ನನ್ನು ರಕ್ಷಿಸಲಾರದು.
7ಹಿಂಸಕರಿಂದ ಬಿಡಿಸಿದವನು ನೀನೇ;ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ.
8ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ;ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು.
9ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ;ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ.
10ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದಿ;ನಮ್ಮ ವೈರಿಗಳು ತಮಗೋಸ್ಕರ ಬೇಕಾದ ಹಾಗೆ ಕೊಳ್ಳೆಹೊಡೆಯುತ್ತಾರೆ.
11ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ;ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.
12ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ,ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ.
13ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ;ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ, ಕುಚೋದ್ಯಕ್ಕೂ ಒಳಪಡಿಸಿದಿ.
14ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ;ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ.
15ದೂಷಕರ ನಿಂದಾವಚನಗಳಿಂದಲೂ,ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ,
16ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ;ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ.
17ನಾವು ನಿನ್ನನ್ನು ಮರೆಯದೆಯೂ,ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ;
ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ!
18ನಮ್ಮ ಹೃದಯವು ಹಿಂದಿರುಗಲಿಲ್ಲ;ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ.
19ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ?ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?
20ನಾವು ನಮ್ಮ ದೇವರ ಹೆಸರನ್ನು ಮರೆತು,ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ,
21ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು,ವಿಚಾರಿಸುತ್ತಿರಲಿಲ್ಲವೋ?
22ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ;ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.
23ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು;ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ.
24ಏಕೆ ವಿಮುಖನಾಗಿದ್ದಿ?ನಮಗಿರುವ ಬಾಧೆಗಳನ್ನೂ, ಹಿಂಸೆಗಳನ್ನೂ ಏಕೆ ಲಕ್ಷಿಸುವುದಿಲ್ಲ?
25ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ;ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ.
26ಎದ್ದು ಬಂದು ಸಹಾಯಮಾಡು;ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಗಾಗಿ ನಮ್ಮನ್ನು ವಿಮೋಚಿಸು.
45ರಾಜನ ವಿವಾಹದ ವರ್ಣನೆ
1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋಶನ್ನೀಮ್ ಎಂಬ ರಾಗದ ಮೇಲೆ ಹಾಡತಕ್ಕದ್ದು; ಕೋರಹೀಯರ ಪದ್ಯ; ಪ್ರೇಮಗೀತೆ.
(ಯೆಶಾ. 61:10—62:5)
1ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ;ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು.
ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.
2ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು;ನಿನ್ನ ಮಾತುಗಳು ಬಹು ಮಧುರ;
ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ.
3ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು,ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.
4ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿಸಕಲ ವೈಭವದೊಡನೆ ವಾಹನರೂಢನಾಗಿ,
ವಿಜಯೋತ್ಸವದೊಡನೆ ಹೊರಡು.
ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.
5ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು;ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು;
ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.
6 ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು;ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.
7ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ;ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ,
ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.
8ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದಎಷ್ಟೋ ಸುವಾಸನೆಯುಳ್ಳವುಗಳಾಗಿವೆ;
ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.
9ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ;ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ,
ನಿನ್ನ ಬಲಭಾಗದಲ್ಲಿ ನಿಂತಿರುವಳು.
10ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು;ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.
11ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು.ಆತನೇ ನಿನಗೆ ಒಡೆಯನು;
ಆತನನ್ನು ಗೌರವಿಸು.
12ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು;ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು.
13ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ;ಆಕೆಯು ಜರತಾರಿಯ [ಚಿನ್ನದಿಂದ ನೇಯ್ದ] ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.
14ಆಕೆಯು ಬೂಟೇದಾರಿ [ಕಸೂತಿ ಕೆಲಸದ] ವಸ್ತ್ರಗಳನ್ನು ಧರಿಸಿಕೊಂಡು,ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ,
ಅರಸನ ಬಳಿಗೆ ಬರುವರು.
15ಅವರು ಉಲ್ಲಾಸದಿಂದಲೂ, ಸಂತೋಷದಿಂದಲೂ ಬಂದು,ಅರಮನೆಯೊಳಗೆ ಪ್ರವೇಶಿಸುವರು.
16ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು;ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ.
17ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು;ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು.
46ಯೆಹೋವನು ಭಕ್ತಪಾಲಕನೂ, ಸರ್ವಾಧಿಪತಿಯೂ ಎಂಬುದು
1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು.
(ಕೀರ್ತ. 76; 1 ಪೂರ್ವ. 15:20)
1ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ;ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
2ಆದುದರಿಂದ ಭೂಮಿಯು ಮಾರ್ಪಟ್ಟರೂ,ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ,
ನಮಗೇನೂ ಭಯವಿಲ್ಲ.
3ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು?ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ?
ಸೆಲಾ
4ಒಂದು ನದಿ ಇದೆ; ಅದರ ಕಾಲುವೆಗಳು,ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ,
ದೇವರ ನಗರವನ್ನು ಸಂತೋಷಪಡಿಸುತ್ತವೆ.
5ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ.ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.
6ಜನಾಂಗಗಳು ಕಳವಳಗೊಂಡವು;ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.
7ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ;ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ.
ಸೆಲಾ
8ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ;ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.
9ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ;ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ;
ರಥಗಳನ್ನು ದಹಿಸಿಬಿಟ್ಟಿದ್ದಾನೆ.
10<< ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು;ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ>> ಎಂದು ಹೇಳಿದ್ದಾನೆ.
11ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ;ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ.
ಸೆಲಾ.
47ಸಾರ್ವಭೌಮನಾದ ಯೆಹೋವನು ಸಿಂಹಾಸನಾರೂಢನಾಗಿರುವುದು
ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ.
(ಕೀರ್ತ. 93; 95—100)
1ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ;ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.
2ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ;ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.
3ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ,ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.
4ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ,ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ.
ಸೆಲಾ
5ದೇವರು ಜಯಘೋಷದಿಂದ ಏರಿದ್ದಾನೆ;ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.
6ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ;ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ.
7ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು;ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.
8ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ;ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.
9ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ;
ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ.
ಆತನೇ ಸರ್ವೋನ್ನತನು.
48ಚೀಯೋನನ್ನು ರಕ್ಷಿಸಿದ್ದಕ್ಕಾಗಿ ಯೆಹೋವನನ್ನು ಕೊಂಡಾಡುವುದು
ಹಾಡು; ಕೋರಹೀಯರ ಕೀರ್ತನೆ.
(ಕೀರ್ತ. 46)
1ಯೆಹೋವನು ಮಹೋನ್ನತನು;ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.
2ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವುಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ,
ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.
3ದೇವರು ಅದರ ಕೊತ್ತಲುಗಳಲ್ಲಿ,ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.
4ರಾಜರು ಕೂಡಿಕೊಂಡರು;ಅವರು ಒಗ್ಗಟ್ಟಾಗಿ ಬಂದರು.
5ನೋಡಿ ಬೆರಗಾದರು;ತಲ್ಲಣಿಸಿ ಓಡಿಹೋದರು.
6ಕಂಪನವೂ ಹೆರುವವಳಂತೆ,ವೇದನೆಯೂ ಅವರಿಗೆ ಉಂಟಾಯಿತು.
7ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.
8ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು;ನಮ್ಮ ದೇವರೂ ಸೇನಾಧೀಶನೂ ಆಗಿರುವ
ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ.
ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು.
ಸೆಲಾ
9ದೇವರೇ, ನಾವು ನಿನ್ನ ಆಲಯದಲ್ಲಿ,ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ;
10ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ,ಲೋಕವೆಲ್ಲಾ ನಿನ್ನನ್ನು ಹೊಗಳುವುದು.
ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.
11ಚೀಯೋನ್ ಪಟ್ಟಣದವರು ಹರ್ಷಿಸಲಿ;ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ,
ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ.
12ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ,ಅದರ ಬುರುಜುಗಳನ್ನು ಲೆಕ್ಕಿಸಿರಿ.
13ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ;ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.
14ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ,ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು,
ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.
49ಐಶ್ವರ್ಯ ವ್ಯರ್ಥ; ಮರಣ ನಿಶ್ಚಯ; ಸದ್ಭಕ್ತರಿಗೆ ನಿರೀಕ್ಷೆಯುಂಟು
ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ.
(ಕೀರ್ತ. 73)
1ಸಕಲ ದೇಶಗಳ ಜನರೇ, ಕೇಳಿರಿ;ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.
2ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ,ನೀವೆಲ್ಲರೂ ಒಂದಾಗಿ ಬಂದು ಆಲಿಸಿರಿ.
3ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು;ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ.
4ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ,ಅದರ ಗೂಡಾರ್ಥವನ್ನು ಪ್ರಕಟಿಸುವೆನು.
5ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು?ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?
6ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ;ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.
7ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ,ದೇವರಿಗೆ ಈಡನ್ನು ಕೊಡಲಾರನು.
8ಅವನ ಪ್ರಾಣವು ಶಾಶ್ವತವಾಗಿ ಉಳಿಯಲು,ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು.
9ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ,ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.
10ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ;ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ.
ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.
11ಅವರ ಸಮಾಧಿಯೇ ಶಾಶ್ವತಮಂದಿರವು;ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ,
ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ.
12ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ;ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ.
13ಮೂರ್ಖರಿಗೂ ಅವರ ಮಾತಿನಂತೆನಡೆಯುವವರಿಗೂ ಇದೇ ಗತಿ.
ಸೆಲಾ
14ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು;ಮೃತ್ಯುವೇ ಅವರ ಪಾಲಕನು.
ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು,
ಅವರಿಗೆ ನಿವಾಸವಿಲ್ಲದ ಹಾಗೆ,
ಪಾತಾಳವು ಅವರ ರೂಪವನ್ನು ನಾಶಮಾಡುವುದು.
15ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ,ನನ್ನನ್ನು ಸ್ವೀಕಾರಮಾಡುವನು.
ಸೆಲಾ
16ಒಬ್ಬನ ಐಶ್ವರ್ಯವೂ, ಗೃಹವೈಭವವೂವೃದ್ಧಿಯಾದಾಗ ಕಳವಳಪಡಬೇಡ.
17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ;ಅವನ ವೈಭವವು ಅವನೊಡನೆ ಹೋಗುವುದಿಲ್ಲ.
18ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ,ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ,
ಜನರಸ್ತುತಿಯಿಂದಲೂ ಕೂಡಿದವನಾದರೂ,
19ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ,ಎಂದಿಗೂ ಬೆಳಕನ್ನು ನೋಡುವುದಿಲ್ಲ.
20ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ,ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ.
50ದೇವರು ಸದಾಚಾರವನ್ನೇ ಮೆಚ್ಚುವನು
ಆಸಾಫನ ಕೀರ್ತನೆ.
1ಬಲಿಷ್ಠ ದೇವರಾದ ಯೆಹೋವನುಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ,
ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.
2ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ,ದೇವರು ಪ್ರಕಾಶಿಸುತ್ತಾನೆ.
3ನಮ್ಮ ದೇವರು ಪ್ರತ್ಯಕ್ಷನಾಗುವನು,ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ;
ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ;
ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.
4ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನುಸಾಕ್ಷಿಗಳನ್ನಾಗಿ ನೇಮಿಸುತ್ತಾನೆ.
5<<ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನುನನ್ನ ಬಳಿಗೆ ಕರೆದುಕೊಂಡು ಬನ್ನಿರಿ>> ಎಂದು ಆಜ್ಞಾಪಿಸುತ್ತಾನೆ.
6ದೇವರು ತಾನೇ ನ್ಯಾಯಾಧಿಪತಿ;ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ.
ಸೆಲಾ
7ಆತನು ಆಜ್ಞಾಪಿಸುವುದು ಏನೆಂದರೆ, <<ಪ್ರಜೆಗಳಿರಾ, ಇಸ್ರಾಯೇಲ್ಯರೇ,ದೇವರಾದ ನಾನೇ ನಿಮ್ಮ ದೇವರು;
ನಿಮಗೆ ಖಂಡಿತವಾಗಿ ಹೇಳುತ್ತೇನೆ>> ಕೇಳಿರಿ.
8ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ;ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.
9ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ;ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.
10ಕಾಡಿನಲ್ಲಿರುವ ಸರ್ವಮೃಗಗಳೂ,ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.
11 ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ;ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.
12ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ;ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ.
13ನಾನು ಹೋರಿಗಳ ಮಾಂಸವನ್ನು ತಿನ್ನುವುದೂ,ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ?
14ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ;ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
15ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು;ಆಗ ನನ್ನನ್ನು ಕೊಂಡಾಡುವಿರಿ.
16ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ,<<ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು?
ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
17ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ;ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.
18ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ;ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.
19ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ;ನಾಲಿಗೆಯು ಮೋಸವನ್ನು ನೇಯುತ್ತದೆ.
20ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ;ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ.
21ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು.ಆದುದರಿಂದ, <ದೇವರೂ ನಮ್ಮಂಥವನೇ> ಎಂದು ತಿಳಿದುಕೊಂಡಿರಿ.
ಈಗಲಾದರೋ ನಾನು ಎಲ್ಲವನ್ನು,
ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.
22ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ;ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು.
ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.
23ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು;ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.>>
51ಪಾಪಕ್ಷಮಾಪಣೆಗಾಗಿ ವಿಜ್ಞಾಪನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಬತ್ಷೆಬಳ ಬಳಿಗೆ ಹೋದ ಮೇಲೆ ಪ್ರವಾದಿಯಾದ ನಾತಾನನು ಎಚ್ಚರಿಸಿದಾಗ ರಚಿಸಿದ ಕೀರ್ತನೆ.
1ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು;ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.
2ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು;ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.
3ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ;ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
4ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ;ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ.
ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
5ಹುಟ್ಟಿದಂದಿನಿಂದ ನಾನು ಪಾಪಿಯೇ;ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.
6ಯಥಾರ್ಥಚಿತ್ತವೇ ನಿನಗೆ ಸಂತೋಷ;ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.
7ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು;
ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.
8ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು;ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.
9ನನ್ನ ದೋಷಕ್ಕೆ ವಿಮುಖನಾಗು;ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.
10ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು;ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.
11ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ;ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.
12ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು;ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.
13ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು;ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.
14ದೇವರೇ, ನನ್ನ ರಕ್ಷಣಾ ಕರ್ತನೇ,ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು;
ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.
15ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆನನ್ನ ತುಟಿಗಳನ್ನು ತೆರೆಯಮಾಡು.
16ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು;ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.
17 ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ;ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.
18ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು;ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು.
19ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ,ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು.
ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.
52ದುಷ್ಟಾಧಿಕಾರಿಯ ದುರ್ಸ್ವಭಾವದ ಖಂಡನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಅಹೀಮೆಲೆಕನ ಮನೆಗೆ ಬಂದ ವರ್ತಮಾನವನ್ನು ಎದೋಮ್ಯನಾದ ದೋಯೇಗನು ಸೌಲನಿಗೆ ತಿಳಿಸಿದಾಗ ದಾವೀದನು ರಚಿಸಿದ ಪದ್ಯ.
1 ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು?ದೇವರ ಕೃಪೆಯು ಯಾವಾಗಲೂ ಇರುವುದು.
2ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆಅಪಾಯಗಳನ್ನೇ ಕಲ್ಪಿಸುತ್ತದೆ.
3ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ;ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ.
ಸೆಲಾ
4ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.
5ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು;ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು;
ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.
6ನೀತಿವಂತರು ಅದನ್ನು ನೋಡಿ ಭಯಪಡುವರು;ಅವರು ಪರಿಹಾಸ್ಯಮಾಡುತ್ತಾ,
7<<ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ>> ಎಂದು ಹೇಳುವರು.
8ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು;ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.
9ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು;ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು.
53ದುಷ್ಟನಾಸ್ತಿಕರಿಂದ ತಪ್ಪಿಸಿ ಕಾಪಾಡಬೇಕೆಂದು ಪ್ರಾರ್ಥಿಸುವುದು
ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಪದ್ಯ.
1ದುರ್ಮತಿಗಳು, <<ದೇವರಿಲ್ಲ>> ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ;ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ;
ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
2ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದುದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
3ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ;ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.
4ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ;
ದೇವರನ್ನು ಪ್ರಾರ್ಥಿಸುವುದಿಲ್ಲ.
5ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ,ಅವರು ಪಕ್ಕನೆ ಭಯಭ್ರಾಂತರಾದರು;
ದುಷ್ಟರನ್ನು ದೇವರು ಸಂಹರಿಸಿ
ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ.
ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.
6ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ.ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ,
ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು;
ಇಸ್ರಾಯೇಲರು ಹರ್ಷಿಸುವರು.
54ವೈರಿಗಳಿಂದ ರಕ್ಷಿಸಬೇಕೆಂದು ಪ್ರಾರ್ಥಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ.
1ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು;ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.
2ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು;ನನ್ನ ಮಾತುಗಳಿಗೆ ಕಿವಿಗೊಡು.
3 ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ;ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ.
ಅವರು ದೇವರನ್ನು ಲಕ್ಷಿಸುವುದೇ ಇಲ್ಲ.
ಸೆಲಾ
4ಇಗೋ, ದೇವರೇ ನನಗೆ ಸಹಾಯಕನು; ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು.
5ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ.ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು.
6ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು;ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.
7ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ,ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ.
55ದ್ರೋಹಿಗಳ ನಿರ್ಮೂಲಕ್ಕಾಗಿ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಪದ್ಯ.
1ದೇವರೇ, ನನ್ನ ಮೊರೆಯನ್ನು ಲಾಲಿಸು;ನನ್ನ ವಿಜ್ಞಾಪನೆಗೆ ಕಿವಿಮುಚ್ಚಿಕೊಳ್ಳಬೇಡ.
2ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.
3ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ,ಹೊಯ್ದಾಡುತ್ತಾ ನರಳುತ್ತಿದ್ದೇನೆ.
ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ,
ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.
4ನನ್ನ ಹೃದಯವು ನೊಂದು ಬೆಂದುಹೋಗಿದೆ;ಮರಣಭಯವು ನನ್ನನ್ನು ಆವರಿಸಿಕೊಂಡಿದೆ.
5ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ. 6ನಾನು, <<ಆಹಾ, ನನಗೆ ರೆಕ್ಕೆಗಳಿದ್ದರೆ ಪಾರಿವಾಳದಂತೆ ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು.
7ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು, 8ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು>> ಅಂದುಕೊಂಡೆನು. ಸೆಲಾ
9ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು.ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ.
10ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು;ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ.
11ಅದರೊಳಗೆಲ್ಲಾ ನಾಶನವೇ;ದಬ್ಬಾಳಿಕೆ ಮತ್ತು ವಂಚನೆ ಅದರ ಬೀದಿಗಳಿಂದ ತೊಲಗವು.
12ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು;ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.
13ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.
14ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ.
15ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ.ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.
16ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು;ಆತನು ನನ್ನನ್ನು ರಕ್ಷಿಸುವನು.
17ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು.ಆತನು ಹೇಗೂ ನನ್ನ ಮೊರೆಯನ್ನು ಕೇಳಿ
18ನನ್ನ ವಿರೋಧಿಗಳು ಅನೇಕರಿದ್ದರೂಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು.
19ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟುಅವರನ್ನು ತಗ್ಗಿಸಿಬಿಡುವನು.
ಸೆಲಾ
ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವುದಿಲ್ಲ.
20ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.
21ಅವನ ಮಾತು ಬೆಣ್ಣೆಯಂತೆ ನುಣುಪು;ಹೃದಯವೋ ಕಲಹಮಯ.
ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.
22ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು;ಆತನು ನಿನ್ನನ್ನು ಉದ್ಧಾರಮಾಡುವನು.
ನೀತಿವಂತನನ್ನು ಎಂದಿಗೂ ಕದಲಗೊಡಿಸನು.
23ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ.ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ.
ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.
56ಶತ್ರುಪೀಡಿತರಾದ ಭಕ್ತರ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೋನತ್ ಎಲೆಮ್ ರೆಹೋಕೀಮ್ ಎಂಬ ರಾಗ; ದಾವೀದನು ಗತ್ ಎಂಬ ಊರಲ್ಲಿ ಫಿಲಿಷ್ಟಿಯರ ಕೈವಶವಾದಾಗ ರಚಿಸಿದ ಕಾವ್ಯ.
1ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ.ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.
2ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ;ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು.
3ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.
4ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು;ದೇವರನ್ನು ನಂಬಿ ನಿರ್ಭಯದಿಂದಿರುವೆನು.
ನರಪ್ರಾಣಿಗಳು ನನಗೆ ಏನು ಮಾಡಾರು?
5ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ;ಅವರು ಬಗೆಯುವುದೆಲ್ಲ ನನಗೆ ಕೇಡೇ.
6ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ,ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.
7ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ?ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು.
8ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ.ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ;
ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.
9ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ.
10ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.ಯೆಹೋವನಲ್ಲಿ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.
11ದೇವರನ್ನು ನಂಬಿ ನಿರ್ಭಯದಿಂದಿರುವೆನು;ನರಪ್ರಾಣಿಗಳು ನನಗೆ ಏನು ಮಾಡಾರು?
12ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು;ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.
13ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದುನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ,
ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.
57ಶತ್ರುಬಾಧಿತನಾದ ಸದ್ಭಕ್ತನ ವಿಜ್ಞಾಪನೆಯೂ ಸ್ತೋತ್ರವೂ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ.
1ದೇವರೇ, ಕರುಣಿಸು, ನನ್ನನ್ನು ಕರುಣಿಸು.ನೀನೇ ನನ್ನ ಆಶ್ರಯಸ್ಥಾನವಲ್ಲವೇ!
ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
2ಪರಾತ್ಪರನಾದ ದೇವರಿಗೆ ಮೊರೆಯಿಡುವೆನು,ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು.
3ಆತನು ಪರಲೋಕದಿಂದ ಆಲಿಸಿ,ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು;
ಸೆಲಾ
ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.
4ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ;ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ.
ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ,
ನಾಲಿಗೆಗಳು ಹದವಾದ ಕತ್ತಿಗಳೇ.
5ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ;ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
6ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ;ನನ್ನ ಪ್ರಾಣವು ಕುಂದಿಹೋಯಿತು.
ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು;
ತಾವೇ ಅದರಲ್ಲಿ ಬಿದ್ದುಹೋದರು.
ಸೆಲಾ
7ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ.ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.
8ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ.ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
9ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು;ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
10ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ,ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ.
11ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ;ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
58ಅನ್ಯಾಯಾಧಿಕಾರಿಗಳಿಗೆ ಪ್ರತಿದಂಡನೆಯಾಗಬೇಕೆಂದು ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ದಾವೀದನ ಕಾವ್ಯ.
1ಅಧಿಕಾರಿಗಳೇ , ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ?ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?
2ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ;ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.
3ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು;ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.
4ಅವರು ಸರ್ಪದಂತೆ ವಿಷಭರಿತರು.
5ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.
6ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು;ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.
7ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ;ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.
8ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ;ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.
9ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.
10ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ,ಅವರ ರಕ್ತದಲ್ಲಿ ಕಾಲಾಡಿಸುವರು.
11ನೀತಿವಂತನಿಗೆ ಫಲವುಂಟೆಂತಲೂ,ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.
59ಹಿಂಸೆಗೊಳಗಾದ ನಿರಪರಾಧಿಯ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಸೌಲನ ಕಡೆಯವರು ದಾವೀದನ ಜೀವತೆಗೆಯಬೇಕೆಂದು ಅವನ ಮನೆಯ ಸುತ್ತಲೂ ಹೊಂಚುಹಾಕುತ್ತಿದ್ದಾಗ ಅವನು ರಚಿಸಿದ ಕಾವ್ಯ.
1ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು;ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು.
2ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು. 3ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ;ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ.
ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!
4ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ;ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು.
5ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ,ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು.
ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ.
ಸೆಲಾ
6ಅವರು ಪ್ರತಿಸಾಯಂಕಾಲವೂ ಬಂದು ಬಂದುನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಿದ್ದಾರೆ.
7ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ;ಅವೆಲ್ಲಾ ಹರಿತವಾದ ಕತ್ತಿಗಳಂತಿವೆ,
ಅವರು, <<ನಮ್ಮನ್ನು ಕೇಳುವವರು ಯಾರು?>> ಅಂದುಕೊಳ್ಳುತ್ತಾರೆ.
8ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ;ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ.
9ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ.ನನ್ನ ಆಶ್ರಯದುರ್ಗವು ದೇವರೇ.
10ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು;ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.
11ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ.ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ.
ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.
12ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ.ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.
13ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ,ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು.
ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು,
ಭೂಲೋಕದಲ್ಲೆಲ್ಲಾ ಗೊತ್ತಾಗಲಿ.
ಸೆಲಾ
14ಅವರು ಪ್ರತಿಸಾಯಂಕಾಲವೂ ಬಂದು ಬಂದು,ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ.
15ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ;ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ .
16ನಾನಾದರೋ, ಇಕ್ಕಟ್ಟಿನ ಕಾಲದಲ್ಲಿಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು;
ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.
17ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು,ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.
60ಅಪಜಯ ಹೊಂದಿದವರು ಜಯಕ್ಕಾಗಿ ಪ್ರಾರ್ಥಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಷೂಷನ್ ಎದೂತೆಂಬ ರಾಗ; ದಾವೀದನು ಅರಾಮ್ ರಾಜ್ಯಗಳ ಸಂಗಡ ಯುದ್ಧ ಮಾಡುವಷ್ಟರೊಳಗೆ ಯೋವಾಬನು ಹಿಂದಿರುಗಿ ಹೋಗಿ ಉಪ್ಪಿನ ತಗ್ಗಿನಲ್ಲಿ ಹನ್ನೆರಡು ಸಾವಿರ ಎದೋಮ್ಯರನ್ನು ಹೊಡೆದಾಗ ದಾವೀದನು ರಚಿಸಿದ ಕಾವ್ಯ. ಬಾಯಿಪಾಠ ಮಾಡಿಸತಕ್ಕದ್ದು.
1ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ;ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ;
ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.
2ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ;ಅದು ನಡುಗುತ್ತಿರುವುದಲ್ಲಾ.
ಅದರ ಒಡಕುಗಳನ್ನು ಸರಿಮಾಡು;
3ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ;ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.
4ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು,ಆದ್ದರಿಂದ ಅವರು ಬಿಲ್ಲಿನಿಂದ ತಪ್ಪಿಸಿಕೊಳ್ಳಬಹುದು.
ಸೆಲಾ
5ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು.ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
6ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ.ಜಯಘೋಷಮಾಡುವೆನು;
ಶೆಖೆಮ್ ಪ್ರದೇಶವನ್ನು ಹಂಚುವೆನು.
ಸುಖೋತ್ ಬಯಲನ್ನು ಅಳೆದುಕೊಡುವೆನು.
7ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು;ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ.
ನನ್ನ ರಾಜದಂಡವು ಯೆಹೂದ ಕುಲವೇ.
8ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು;ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ.
ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು.
9ಕೋಟೆಕೊತ್ತಲುಗಳುಳ್ಳ ನಗರಕ್ಕೆನನ್ನನ್ನು ಕರೆದುಕೊಂಡು ಹೋಗುವವರು ಯಾರು?
ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
10ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ!ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ?
11ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು;ಮನುಷ್ಯರ ಸಹಾಯವು ವ್ಯರ್ಥ.
12ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು;ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.
61ಸದ್ಭಕ್ತರು ತಮಗಾಗಿಯೂ ತಮ್ಮ ರಾಜನಿಗಾಗಿಯೂ ಮಾಡುವ ವಿಜ್ಞಾಪನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ.
1ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು.
2ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ;ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.
3ನೀನು ನನಗೆ ಶರಣನೂ,ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ.
4ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ;ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು.
ಸೆಲಾ
5ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ;ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.
6ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು;ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ.
7ಅವನು ನಿನ್ನ ಸಾನ್ನಿಧ್ಯವನ್ನು ಪಡೆದು,ಸದಾಕಾಲವೂ ಸಿಂಹಾಸನಾರೂಢನಾಗಿರಲಿ;
ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.
8ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ,ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.
62ದೇವರ ಆಶ್ರಯದಲ್ಲಿರುವವರ ಮನಶ್ಯಾಂತಿ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ.
1ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು.ನನ್ನ ರಕ್ಷಣೆಯು ಆತನಿಂದಲೇ.
2ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ;ನಾನು ಕದಲಿದರೂ ಬೀಳೆನು.
3ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು,ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ
ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?
4ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ.ಸುಳ್ಳಾಡುವುದು ಅವರಿಗೆ ಅತಿಸಂತೋಷ;
ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ.
ಸೆಲಾ
5ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು.ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.
6ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ;ನಾನು ಕದಲುವುದಿಲ್ಲ.
7ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ;ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.
8ಜನರೇ, ಯಾವಾಗಲೂ ಆತನನ್ನೇ ನಂಬಿ,ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ;
9ನರರು ಬರೀ ಉಸಿರೇ;ನರಾಧಿಪತಿಗಳು ಬರೀ ಮಾಯವೇ.
ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.
10ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ;ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ;
ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
11ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ,ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.
12ಕರ್ತನೇ, ನೀನು ಪ್ರೀತಿಸ್ವರೂಪನಾಗಿಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.
63ಭಕ್ತನು ದೇವದರ್ಶನವನ್ನು ಹಂಬಲಿಸಿ ಸಂತೃಪ್ತಿಹೊಂದಿದ್ದು
ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ.
1ದೇವರೇ, ನೀನೇ ನನ್ನ ದೇವರು;ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ.
ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ;
ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ,
ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.
2ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ,ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.
3ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ;ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು.
4ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ,ನಿನ್ನ ಹೆಸರೆತ್ತಿ ಕೈಮುಗಿಯುವೆನು.
5ಮೃಷ್ಟಭೋಜನದಿಂದಲೋ ಎಂಬಂತೆ,ನನ್ನ ಮನಸ್ಸು ಸಂತುಷ್ಟವಾಗಿರುವುದು;
ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು.
6ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ,ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.
7ನೀನು ನನಗೆ ಸಹಾಯಕನಾಗಿರುವೆಯಲ್ಲಾ;ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು,
ಆನಂದಘೋಷ ಮಾಡುತ್ತಿರುವೆನು.
8ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು;ನಿನ್ನ ಬಲಗೈ ನನಗೆ ಆಧಾರವಾಗಿರುವುದು.
9ನನ್ನ ಜೀವಕ್ಕೆ ಕೇಡು ಬಗೆಯುವವರೋ,ಅಧೋಲೋಕಕ್ಕೆ ಇಳಿದುಹೋಗುವರು.
10ಅವರು ಕತ್ತಿಗೆ ಬಲಿಯಾಗುವರು;ನರಿಗಳ ಪಾಲಾಗುವರು.
11ಆದರೆ ಅರಸನೋ ದೇವರಲ್ಲಿ ಆನಂದಿಸುವನು,ದೇವರ ಮೇಲೆ ಆಣೆಯಿಡುವವರೆಲ್ಲರು
ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು.
64ಸಂರಕ್ಷಣೆಗಾಗಿ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
1ದೇವರೇ, ನನ್ನ ಸ್ವರವನ್ನು ಕೇಳಿ,ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.
2ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ,ನನ್ನನ್ನು ತಪ್ಪಿಸಿ ಭದ್ರಪಡಿಸು.
3ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ;ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.
4ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ.ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.
5ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡುತಮ್ಮೊಳಗೆ, <<ರಹಸ್ಯವಾಗಿ ಬಲೆಗಳನ್ನು ಒಡ್ಡೋಣ;
ನಮ್ಮನ್ನು ನೋಡುವವರು ಯಾರು?>> ಅಂದುಕೊಳ್ಳುತ್ತಾರೆ.
6ಅವರು, <<ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ>> ಅಂದುಕೊಳ್ಳುತ್ತಾರೆ;ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.
7ಆದರೆ ದೇವರು ಬಾಣವನ್ನು ಎಸೆಯಲು,ಫಕ್ಕನೆ ಅವರಿಗೆ ಗಾಯವಾಗುವುದು.
8ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು;ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.
9ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ,ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.
10ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು;ಸರಳಹೃದಯದವರೆಲ್ಲರೂ ಹಿಗ್ಗುವರು.
65ಲೋಕಪರಿಪಾಲನೆ ಮತ್ತು ಫಲಸಮೃದ್ಧಿಗಾಗಿ ದೇವರನ್ನು ಸ್ತುತಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ, ಹಾಡು.
1ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ;ಹರಕೆಗಳು ನಿನಗೆ ಸಲ್ಲುತ್ತವೆ.
2ಪ್ರಾರ್ಥನೆಯನ್ನು ಕೇಳುವವನೇ,ನರರೆಲ್ಲರೂ ನಿನ್ನ ಬಳಿಗೆ ಬರುವರು.
3ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ.ಆದರೆ ನಮ್ಮ ದೋಷಪರಿಹಾರಕನು ನೀನೇ.
4ನಿನ್ನ ಅಂಗಳದಲ್ಲಿ ವಾಸಿಸುವವರಾಗಿ,ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ,
ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು.
ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ
ನಮಗೆ ಸಂತೃಪ್ತಿಯಾಗಲಿ.
5ನಮ್ಮ ರಕ್ಷಕನಾದ ದೇವರೇ,ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ,
ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ.
ಭೂಮಿಯ ಎಲ್ಲಾ ಕಡೆಯವರ,
ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ
ನಂಬಿಕೆಗೆ ಆಧಾರನು ನೀನೇ.
6ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು,ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು.
7ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ,ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.
8ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ,ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ;
ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ.
9ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ,ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ.
ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.
10ನೇಗಿಲಗೆರೆಗಳನ್ನು ತೇವಗೊಳಿಸಿ,ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ;
ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ.
11ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ;ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ
ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು.
12ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ;ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ.
13ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ;ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ;
ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.
66ದೇವರ ಮಹತ್ಕಾರ್ಯಗಳಿಗಾಗಿ ಸ್ತುತಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಹಾಡು; ಕೀರ್ತನೆ.
1ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ.
2ಆತನ ನಾಮದ ಮಹತ್ತನ್ನು ಕೀರ್ತಿಸಿರಿ;ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.
3ನೀವು ದೇವರಿಗೆ, <<ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ;ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;
4ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ,ನಿನ್ನ ನಾಮವನ್ನು ಕೀರ್ತಿಸುವರು>> ಎಂದು ಹೇಳಿರಿ.
ಸೆಲಾ
5ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ;ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.
6ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು;ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು;
ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.
7ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ;ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ.
ಸೆಲಾ
8ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ;ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ.
9ಆತನು ನಮ್ಮನ್ನು ಜೀವದಿಂದುಳಿಸಿ,ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು.
10ದೇವರೇ, ನಮ್ಮನ್ನು ಶೋಧಿಸಿದಿ;ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.
11ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ;ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ;
12ಮನುಷ್ಯರು ನಮ್ಮ ತಲೆಗಳ ಮೇಲೆಯೇ,ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ.
ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು;
ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.
13ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು.
14ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಉಚ್ಚರಿಸಿದಬಾಯಿಂದ ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು.
15ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನುಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು;
ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು.
ಸೆಲಾ
16ಎಲ್ಲಾ ದೇವಭಕ್ತರೇ, ಬಂದು ಕೇಳಿರಿ;ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.
17ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು.
18ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ,ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.
19ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ.
20ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ;ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ.
ದೇವರಿಗೆ ಸ್ತೋತ್ರವಾಗಲಿ.
67ದೇವಸ್ತುತಿ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು.
(ಕೀರ್ತ. 98)
1ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ;ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ.
ಸೆಲಾ
2ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ,ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.
3ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ;ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
4ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ,ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ
ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ.
ಸೆಲಾ
5ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ;ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
6ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ.ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;
7ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ.ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.
68ರಕ್ಷಕನಾದ ದೇವರ ಪ್ರತಾಪವರ್ಣನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ದಾವೀದನ ಕೀರ್ತನೆ; ಹಾಡು.
(ನ್ಯಾಯ. 5; ಧರ್ಮೋ. 33; ಹಬ. 3)
1ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ;ಆತನ ಹಗೆಗಾರರು ಆತನ ಎದುರಿನಿಂದ ಓಡಿಹೋಗಲಿ.
2ಹೊಗೆಯು ಗಾಳಿಯಿಂದ ಹೇಗೋ,ಹಾಗೆ ಅವರು ಆತನಿಂದ ಹಾರಿಹೋಗಲಿ;
ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ,
ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗಲಿ.
3ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ;ಉಲ್ಲಾಸಿಸಲಿ, ಆನಂದಧ್ವನಿಮಾಡಲಿ.
4ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ;ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ.
ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.
5ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ,ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.
6ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ;ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ.
ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.
7ದೇವರೇ, ನೀನು ನಿನ್ನ ಪ್ರಜೆಯ ಮುಂದೆ ಹೊರಟು,ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಾ ಬರುವಾಗ,
ಸೆಲಾ
8ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂಮಿಯು ಕಂಪಿಸಿತು;ಮೇಘಮಂಡಲವು ಮಳೆಸುರಿಸಿತು.
ಇಸ್ರಾಯೇಲರ ದೇವರು ಪ್ರತ್ಯಕ್ಷನಾಗಿದ್ದಾನೆಂದು,
ಆ ಸೀನಾಯ್ ಬೆಟ್ಟವು ಕದಲಿತು.
9ದೇವರೇ, ನೀನು ಹೇರಳವಾಗಿ ಮಳೆಸುರಿಸಿ,ಬಾಯ್ದೆರೆದಿದ್ದ ನಿನ್ನ ಸ್ವತ್ತನ್ನು ಶಾಂತಪಡಿಸಿದಿ.
10ನಿನ್ನ ಪ್ರಜಾಮಂಡಲಿಯು ಅದರಲ್ಲಿ ವಾಸಮಾಡಿತು.ದೇವರೇ, ನೀನು ದಯಾಪರನಾಗಿ ದರಿದ್ರರಿಗೆ ಬೇಕಾದದ್ದೆಲ್ಲವನ್ನು ಒದಗಿಸಿಕೊಟ್ಟಿ.
11ಕರ್ತನು ಆಜ್ಞಾಪಿಸಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀಸಮೂಹವು ಎಷ್ಟೋ ದೊಡ್ಡದು.
12ಓಡಿ ಹೋಗುತ್ತಾರೆ; ಸೈನ್ಯದೊಡನೆ ಅರಸುಗಳು ಓಡಿ ಹೋಗುತ್ತಾರೆ;ಮನೆಯಲ್ಲಿದ್ದ ಸ್ತ್ರೀಯರು ಕೊಳ್ಳೆಯನ್ನು ಹಂಚುತ್ತಾರೆ.
13 ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವುದೇನು?ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ,
ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.
14ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ,ಸಲ್ಮೋನಿನ ಮೇಲೆ ಹಿಮವು ಬಿದ್ದಿತು.
15ಬಾಷಾನಿನ ಪರ್ವತವು ಮಹೋನ್ನತವಾಗಿದೆ;ಆ ಬಾಷಾನ್ ಗಿರಿಯು ಶಿಖರಗಳುಳ್ಳದ್ದೇ.
16ಎಲೈ, ಶಿಖರೋನ್ನತಪರ್ವತಗಳೇ,ದೇವರು ತನ್ನ ನಿವಾಸಕ್ಕಾಗಿ ಆರಿಸಿಕೊಂಡಿರುವ ಈ ಪರ್ವತವನ್ನು
ನೀವು ಓರೆಗಣ್ಣಿನಿಂದ ನೋಡುವುದೇಕೆ?
ಯೆಹೋವನು ಸದಾಕಾಲವೂ ಇದರಲ್ಲೇ ವಾಸಿಸುವನು.
17ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ.ಕರ್ತನಾದ ಯೆಹೋವನು ಅವುಗಳ ಸಮೇತವಾಗಿ,
ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ .
18ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ,ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ,
ದೇವನಾದ ಯಾಹುವು ಅಲ್ಲೇ ವಾಸಿಸುವಂತೆ,
ಉನ್ನತಸ್ಥಾನಕ್ಕೆ ಏರಿದ್ದೀ.
19ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ.ನಮ್ಮನ್ನು ರಕ್ಷಿಸುವ ದೇವರು ಆತನೇ.
ಸೆಲಾ
20ನಮ್ಮ ದೇವರು ನಮ್ಮನ್ನು ವಿಮೋಚಿಸುವುದಕ್ಕೋಸ್ಕರ ದೇವರಾಗಿದ್ದಾನೆ;ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.
21ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ,ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು.
22ಕರ್ತನು, <<ನಾನು ಅವರನ್ನು ಬಾಷಾನಿನಿಂದಲೂ,ಸಮುದ್ರ ತಳದಿಂದಲೂ ಹಿಡಿದು ತರುವೆನು.
23ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ.ನಿನ್ನ ನಾಯಿಗಳ ನಾಲಿಗೆಗಳಿಗೆ ವೈರಿಗಳ ದೇಹದಲ್ಲಿ ಪಾಲುಸಿಕ್ಕುವುದು>> ಎಂದು ನುಡಿದನು.
24ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ;ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಪ್ರವೇಶಿಸುತ್ತಾನೆ.
25ಮುಂಭಾಗದಲ್ಲಿ ಹಾಡುವವರೂ, ಹಿಂಭಾಗದಲ್ಲಿ ವಾದ್ಯಬಾರಿಸುವವರೂ,ಸುತ್ತಲೂ ದಮ್ಮಡಿಬಡಿಯುವ ಸ್ತ್ರೀಯರೂ ಹೋಗುತ್ತಾ,
26<<ಇಸ್ರಾಯೇಲ್ ವಂಶಸ್ಥರೇ, ಸಮೂಹವಾಗಿ ದೇವರಾದ ಕರ್ತನನ್ನು ಕೊಂಡಾಡಿರಿ>> ಎಂದು ಹಾಡುತ್ತಾರೆ.
27ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನ್ ಎಂಬ ಸಣ್ಣ ಗೋತ್ರದವರೂ,ಗುಂಪಾಗಿ ಬರುವ ಯೆಹೂದ ಕುಲದ ಪ್ರಭುಗಳೂ,
ಜೆಬುಲೂನ್, ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ.
28ದೇವರೇ, ನಿನ್ನ ಪ್ರತಾಪವನ್ನು ಆಜ್ಞಾಪಿಸು .ನಿನ್ನ ಮಂದಿರದಲ್ಲಿ ಆಸೀನನಾಗಿ
ನಮಗೋಸ್ಕರ ಮಹತ್ಕಾರ್ಯಗಳನ್ನು ನಡೆಸಿದ ದೇವರೇ, ನಿನ್ನ ಬಲವನ್ನು ಪ್ರಕಟಿಸು.
29ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ. 30ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು,ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು.
ಅವು ಬೆಳ್ಳಿಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ.
ಯುದ್ಧಾಸಕ್ತ ಜನಾಂಗಗಳನ್ನು ಚದುರಿಸಿಬಿಡು.
31ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು;ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು.
32ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ;ಕರ್ತನನ್ನು ಸಂಕೀರ್ತಿಸಿರಿ.
ಸೆಲಾ
33ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ.
ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು.
34ದೇವರ ಪ್ರತಾಪವನ್ನು ಕೊಂಡಾಡಿರಿ.ಆತನ ಗಾಂಭೀರ್ಯವು ಇಸ್ರಾಯೇಲರ ಆಶ್ರಯವಾಗಿದೆ;
ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ.
35ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು.ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು.
ದೇವರಿಗೆ ಸ್ತೋತ್ರ.
69ಸ್ವರಕ್ಷಣೆ ಮತ್ತು ವೈರಿಶಿಕ್ಷೆಗಾಗಿ ಭಕ್ತನ ವಿಜ್ಞಾಪನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಶೋಶನ್ನೀಮೆಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ.
(ಕೀರ್ತ. 22; 35; 40; 45)
1ದೇವರೇ, ರಕ್ಷಿಸು;ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.
2ಆಳವಾದ ಕೆಸರಿನಲ್ಲಿ ಕುಸಿಯುತ್ತಿದ್ದೇನೆ; ನೆಲೆ ಸಿಕ್ಕುತ್ತಿಲ್ಲ.ಜಲರಾಶಿಯೊಳಗೆ ಮುಳುಗುತ್ತಿದ್ದೇನೆ;
ಪ್ರವಾಹವು ನನ್ನನ್ನು ಹೊಡೆದುಕೊಂಡು ಹೋಗುತ್ತಿದೆ.
3ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ;ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.
4ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ;ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ.
ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.
5ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು;ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ.
6ಸೇನಾಧೀಶ್ವರನೇ, ಯೆಹೋವನೇ,ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ;
ಇಸ್ರಾಯೇಲರ ದೇವರೇ, ನಿನ್ನ ದರ್ಶನವನ್ನು ಬಯಸುವವರು
ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.
7ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ;ನಾಚಿಕೆಯು ನನ್ನ ಮುಖವನ್ನು ಕವಿದಿದೆ.
8ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು;ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ.
9ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ.ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.
10 ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ,ಪರಿಹಾಸ್ಯಕ್ಕೆ ಕಾರಣವಾಯಿತು.
11ನಾನು ಗೋಣಿತಟ್ಟು ಕಟ್ಟಿಕೊಂಡದ್ದು,ಅವರ ಗಾದೆಗೆ ಆಸ್ಪದವಾಯಿತು.
12ಊರ ಬಾಗಿಲಲ್ಲಿ ಕುಳಿತುಕೊಳ್ಳುವವರ ಆಡು ಮಾತಿಗೆ ಗುರಿಯಾಗಿದ್ದೇನೆ.ಕುಡುಕರು ನನ್ನ ವಿಷಯವನ್ನು ಹಾಡಿ ಪರಿಹಾಸ್ಯ ಮಾಡುತ್ತಾರೆ.
13ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ;ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ,
ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.
14ನಾನು ಕೆಸರಿನಲ್ಲಿ ಮುಳುಗಿಹೋಗದಂತೆ ಮೇಲೆತ್ತು;ವೈರಿಗಳ ಕೈಯೊಳಗಿಂದ ಬಿಡಿಸು;
ಮಹಾಜಲರಾಶಿಯಿಂದ ಎಳೆದುಕೋ.
15ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ;ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ;
ಪಾತಾಳವು ನನ್ನನ್ನು ನುಂಗದಿರಲಿ.
16ಯೆಹೋವನೇ, ನನ್ನ ಮೊರೆಯನ್ನು ಲಾಲಿಸು;ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ.
ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.
17ನಿನ್ನ ದಾಸನಿಗೆ ವಿಮುಖನಾಗಬೇಡ,ಇಕ್ಕಟ್ಟಿನಲ್ಲಿದ್ದೇನೆ, ತಡಮಾಡದೆ ಸಹಾಯಮಾಡು.
18ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು.ಶತ್ರು ನಿಮಿತ್ತವಾಗಿ ನನ್ನನ್ನು ರಕ್ಷಿಸು.
19ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು;ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ.
20ನಿಂದೆಯಿಂದ ನಿರಾಶೆಗೊಂಡು ಕುಂದಿಹೋಗಿದ್ದೇನೆ.ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ.
ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.
21ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ,ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.
22 ಅವರ ಸಂಪತ್ತು ಅವರಿಗೆ ಉರುಲಾಗಲಿ;ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.
23ಅವರ ಕಣ್ಣು ಮೊಬ್ಬಾಗಿ ಕಾಣದೆ ಹೋಗಲಿ;ಅವರ ನಡುವು ಯಾವಾಗಲೂ ನಡಗುತ್ತಿರಲಿ.
24ನಿನ್ನ ರೌದ್ರವನ್ನು ಅವರ ಮೇಲೆ ಸುರಿದುಬಿಡು;ನಿನ್ನ ಕೋಪಾಗ್ನಿಯು ಅವರನ್ನು ದಹಿಸಲಿ.
25ಅವರ ಪಾಳೆಯವು ಹಾಳುಬೀಳಲಿ;ಅವರ ನಿವಾಸಗಳು ಜನಶೂನ್ಯವಾಗಲಿ.
26ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ;ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.
27ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ.ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ.
28ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು,ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.
29ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ,ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು.
30ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು;ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.
31ಇದು ಯೆಹೋವನಿಗೆ ಕೊಂಬುಗೊರಸುಗಳುಳ್ಳ,ಎಳೇ ಹೋರಿಗಳ ಯಜ್ಞಕ್ಕಿಂತ ಬಹು ಪ್ರಿಯವಾದದ್ದು.
32ದೀನರು ಇದನ್ನು ನೋಡಿ ಹರ್ಷಿಸುವರು.ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.
33ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು;ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.
34ಭೂಮ್ಯಾಕಾಶಗಳೂ, ಸಮುದ್ರಗಳೂ,ಜಲಚರಗಳೂ ಆತನನ್ನು ಕೊಂಡಾಡಲಿ.
35ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ,ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು;
ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು.
36ಅವರ ಸಂತತಿಗೇ ಅದರ ಹಕ್ಕಿರುವುದು;ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.
70ಸಂರಕ್ಷಣೆಗಾಗಿ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು.
(ಕೀರ್ತ. 40:13-17)
1ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು.ಯೆಹೋವನೇ, ಬೇಗನೆ ಬಂದು ಸಹಾಯ ಮಾಡು.
2ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ;ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.
3ಆಹಾ, ಆಹಾ ಎಂದು ಪರಿಹಾಸ್ಯಮಾಡುವವರುತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ.
4ನಿನ್ನ ದರ್ಶನವನ್ನು ಕೋರುವವರೆಲ್ಲರುನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ;
ನಿನ್ನ ಜಯದಲ್ಲಿ ಆನಂದಿಸುವವರು, <<ದೇವರು ಮಹೋನ್ನತನು>> ಎಂದು ಯಾವಾಗಲೂ ಹೇಳಲಿ.
5ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ;ದೇವರೇ, ಬೇಗನೆ ಬಾ.
ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.
71ವೃದ್ಧಾಪ್ಯದ ಪ್ರಾರ್ಥನೆ
1ಯೆಹೋವನೇ, ನಿನ್ನನ್ನು ಮೊರೆಹೊಕ್ಕಿದ್ದೇನೆ;ಎಂದಿಗೂ ಅವಮಾನಕ್ಕೆ ಗುರಿಮಾಡಬೇಡ.
2ನಿನ್ನ ನೀತಿಗನುಸಾರವಾಗಿ ನನ್ನನ್ನು ಬಿಡಿಸಿ ಪಾರುಮಾಡು;ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು.
3ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು;ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ.
ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.
4ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ,ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು.
5ಕರ್ತನಾದ ಯೆಹೋವನೇ,ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ?
6ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ.ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ.
ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.
7ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ;ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.
8ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ;ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.
9ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ;ನನ್ನ ಬಲವು ಕುಂದಿದಾಗ ಕೈಬಿಡಬೇಡ.
10ನನ್ನ ಜೀವಕ್ಕೆ ಹೊಂಚುಹಾಕುವ ವೈರಿಗಳು ಒಟ್ಟಾಗಿ ಆಲೋಚಿಸುತ್ತಾ,
11<<ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ;ಬಿಡಿಸುವವರು ಯಾರೂ ಇಲ್ಲ>> ಎಂದು ಹೇಳಿಕೊಳ್ಳುತ್ತಾರೆ.
12ದೇವರೇ, ದೂರವಾಗಿರಬೇಡ. ನನ್ನ ದೇವರೇ, ಬೇಗ ಸಹಾಯಮಾಡು.
13ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ;ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ.
14ನಾನಂತೂ ನಿರೀಕ್ಷಿಸಿಕೊಂಡೇ ಇರುವೆನು;ನಿನ್ನನ್ನು ಅಧಿಕಾಧಿಕವಾಗಿ ಹೊಗಳುತ್ತಿರುವೆನು.
15ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು;ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.
16ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ತರವಾದ ಕೃತ್ಯಗಳನ್ನು ಸ್ಮರಿಸುವವನಾಗಿನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು.
17ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ.ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.
18ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ;ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು,
ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.
19ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ.ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?
20ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು;ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.
21ನನ್ನ ಗೌರವವನ್ನು ಹೆಚ್ಚಿಸು;ನನಗೆ ಅಭಿಮುಖನಾಗಿ ಸಂತೈಸು.
22ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು;ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು.
ಇಸ್ರಾಯೇಲರ ಪರಿಶುದ್ಧ ದೇವರು,
ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.
23ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂನಿನ್ನನ್ನು ಹಾಡಿಹರಸುವವು.
24ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ.ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವುದು.
72ರಾಜಾಶೀರ್ವಾದ
ಸೊಲೊಮೋನನ ಕೀರ್ತನೆ.
(ಕೀರ್ತ. 21; 45)
1ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು;ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.
2ಅವನು ನಿನ್ನ ಜನರಿಗೆ ನೀತಿಯಿಂದಲೂ,ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.
3ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ,ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.
4ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ;ದೀನರ ಮಕ್ಕಳನ್ನು ಉದ್ಧರಿಸಲಿ;
ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.
5ಸೂರ್ಯನು, ಚಂದ್ರನು ಇರುವವರೆಗೂ,ತಲತಲಾಂತರಗಳವರೆಗೂ ಸೂರ್ಯನು, ಚಂದ್ರನು ಇರುವವರೆಗೂ,
ತಲತಲಾಂತರಗಳವರೆಗೂ ಅವನು ಜೀವಿಸುವನು.
6ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ,ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.
7ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ ;ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.
8ಅವನು ಸಮುದ್ರದಿಂದ ಸಮುದ್ರದ ವರೆಗೂ,ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.
9ಅರಣ್ಯವಾಸಿಗಳು ಅವನಿಗೆ ಅಡ್ಡಬೀಳಲಿ;ಅವನ ವೈರಿಗಳು ಮಣ್ಣುಮುಕ್ಕಲಿ.
10ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ;ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.
11ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ;ಸರ್ವಜನಾಂಗಗಳು ಆತನನ್ನು ಸೇವಿಸಲಿ.
12ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ,ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.
13ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು.
14ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು;ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.
15ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ.ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ;
ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.
16ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ;ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ.
ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.
17ಅವನ ನಾಮವು ಸ್ಥಿರವಾಗಿರಲಿ;ಅವನ ಹೆಸರು ಸೂರ್ಯನಿರುವವರೆಗೆ ಇರಲಿ.
ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ,
ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
18ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ,ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು.
19ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ;ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.
20ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ.
73ತೃತೀಯ ಭಾಗವು 73-89
ದುಷ್ಟರ ಸೌಭಾಗ್ಯವನ್ನು ಕಂಡು ವಿಶ್ವಾಸಭ್ರಷ್ಟರಾಗಬಾರದೆಂಬ ಬೋಧನೆ
ಆಸಾಫನ ಕೀರ್ತನೆ.
(ಕೀರ್ತ. 49)
1ದೇವರು ನಿರ್ಮಲಚಿತ್ತರಾದ ಇಸ್ರಾಯೇಲರಿಗೆ ದಯಾಪರನೇ ಹೌದು.
2ನನ್ನ ಕಾಲುಗಳು ಜಾರಿದವುಗಳೇ; ನನ್ನ ಹೆಜ್ಜೆಗಳು ತಪ್ಪಿದವುಗಳೇ.
3ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡುಸೊಕ್ಕಿನವರ ಮೇಲೆ ಉರಿಗೊಂಡೆನು.
4ಅವರ ಮರಣವು ನಿರ್ಬಾಧಕವಾಗಿದೆ;ಅವರ ದೇಹವು ಕೊಬ್ಬಿದೆ.
5ಮನುಷ್ಯರ ಕಷ್ಟದಲ್ಲಿ ಅವರು ಭಾಗಿಗಳಾಗುವುದಿಲ್ಲ;ಇತರರಿಗೆ ತಗುಲುವಂತೆ ಅವರಿಗೆ ಅಂಟುರೋಗವೂ ತಗುಲುವುದಿಲ್ಲ.
6ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ;ಬಲಾತ್ಕಾರವು ಉಡುಪಾಗಿದೆ.
7ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ;ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.
8ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತನಾಡಿಕೊಳ್ಳುತ್ತಾರೆ;ಬಲಾತ್ಕಾರನಡಿಸಬೇಕೆಂದು ಹೆಮ್ಮೆಕೊಚ್ಚುತ್ತಾರೆ.
9ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ.ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು.
10ಆದುದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ; ಅವರು ಅವರಲ್ಲಿ ಯಾವುದೇ ತಪ್ಪನ್ನು ಕಂಡುಹಿಡಿಯಲಿಲ್ಲ.
11ಅವರು <<ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ>> ಅಂದುಕೊಳ್ಳುತ್ತಾರೆ.
12ನೋಡಿರಿ, ದುಷ್ಟರು ಇಂಥವರೇ;ಅವರು ಸದಾ ಸುಖದಿಂದಿದ್ದು ಸ್ಥಿತಿವಂತರಾಗಿ ಹೋಗುತ್ತಾರೆ.
13ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ,ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ.
14ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು,ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.
15ನಾನು ಈ ಪ್ರಕಾರ ಬಾಯಿಬಿಡುವುದಕ್ಕೆ ಮನಸ್ಸು ಮಾಡಿಕೊಂಡಿದ್ದರೆ,ನಿನ್ನ ಭಕ್ತಕುಲಕ್ಕೆ ದ್ರೋಹಿಯಾಗುತ್ತಿದ್ದೆನು.
16ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು.
17ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು. 18ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು,ಬೀಳಿಸಿ, ನಾಶಮಾಡಿಬಿಡುತ್ತೀ.
19ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ;ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.
20ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ.
21ನನ್ನ ಮನಸ್ಸು ನೊಂದುಹೋಗಿತ್ತು;ಆಂತರ್ಯದಲ್ಲಿ ಅಲಗು ನೆಟ್ಟಂತಿತ್ತು.
22ನಾನು ವಿವೇಕಹೀನ ತಿಳಿವಳಿಕೆ ಇಲ್ಲದವನಂತೆ,ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.
23ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ.ನೀನು ನನ್ನ ಬಲಗೈಯನ್ನು ಹಿಡಿದು,
24ನಿನ್ನ ಚಿತ್ತವನ್ನು ತಿಳಿಯಪಡಿಸಿ,ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.
25ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ?ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.
26ತನುಮನಗಳು ಕ್ಷಯಿಸಿದರೂನನ್ನ ಆತ್ಮಕ್ಕೆ ಬಲವು
ನನ್ನ ಶಾಶ್ವತವಾದ ಪಾಲೂ ದೇವರೇ.
27ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು;ನಿನಗೆ ದ್ರೋಹ ಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ.
28ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು.ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ
ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.
74ದೇವಾಲಯವನ್ನು ಹಾಳುಮಾಡಿದ ಶತ್ರುಗಳನ್ನು ತಗ್ಗಿಸಬೇಕೆಂಬ ಪ್ರಾರ್ಥನೆ
ಆಸಾಫನ ಪದ್ಯ.
(ಕೀರ್ತ. 79)
1ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ?ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?
2ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದುಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ;
ನಿನ್ನ ವಾಸಸ್ಥಾನವಾಗಿದ್ದ ಚೀಯೋನ್ ಪರ್ವತವನ್ನು ಮರೆಯಬೇಡ.
3ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ನೀನು ಹೆಜ್ಜೆ ಹಾಕು.ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡವಿಬಿಟ್ಟಿದ್ದಾನೆ.
4ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ;ನಮ್ಮ ಆರಾಧನಾ ಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ.
5ಮರಗಳ ಗುಂಪಿನಲ್ಲಿ ಕೊಡಲಿಗಳನ್ನು ಮೇಲೆತ್ತುವ ಜನರೋ ಎಂಬಂತಿದ್ದಾರೆ.
6ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ,ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದುಹಾಕುತ್ತಿದ್ದಾರೆ.
7ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ,ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.
8<<ನಾವು ಈ ಜನವನ್ನೆಲ್ಲಾ ಸಂಹರಿಸಿಬಿಡೋಣ>> ಅಂದುಕೊಂಡಿದ್ದಾರೆ;ದೇಶದಲ್ಲಿರುವ ನಿನ್ನ ಎಲ್ಲಾ ಸಭಾಮಂದಿರಗಳನ್ನು ಸುಟ್ಟುಬಿಟ್ಟಿದ್ದಾರೆ.
9ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ.ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ;
ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.
10ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು?ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?
11ಚಾಚಿದ ಬಲಗೈಯನ್ನು ಏಕೆ ಹಿಂದೆಗೆದಿದ್ದೀ?ಅದನ್ನು ಎದೆಯ ಮೇಲಿನಿಂದ ತೆಗೆದು ಅವರನ್ನು ಸಂಹರಿಸಿಬಿಡು.
12ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ,ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ?
13ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು;ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.
14ಲಿವ್ಯಾತಾನನ ಶಿರಚ್ಛೇದನೆಮಾಡಿ,ಅಡವಿಯ ಮೃಗಸಮುದಾಯಕ್ಕೆ ಆಹಾರ ಕೊಟ್ಟವನು ನೀನು.
15ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು;ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.
16ಹಗಲಿರುಳುಗಳನ್ನು ನೇಮಿಸಿದವನು ನೀನು;ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು.
17ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು;ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು.
18ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು,ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.
19ನಿನ್ನ ಬೆಳವಕ್ಕಿಯ ಜೀವವನ್ನು ಕಾಡುಮೃಗಕ್ಕೆ ಕೊಡಬೇಡ;ನಿನ್ನ ದೀನಮಂಡಲಿಯನ್ನು ಸದಾ ಮರೆಯಬೇಡ.
20ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ.ದೇಶದ ಅಂಧಕಾರ ಸ್ಥಾನಗಳಲ್ಲಿ ಬಲತ್ಕಾರವು ತುಂಬಿ ವಾಸಿಸುತ್ತದಲ್ಲಾ.
21ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ;ದುಃಖಿತರೂ, ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ.
22ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು;ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವುದನ್ನು ಜ್ಞಾಪಿಸಿಕೋ.
23ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ,ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯದಿರು.
75ನ್ಯಾಯಾಧೀಶನಾದ ದೇವರಿಗೆ ಸ್ತುತಿ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಕೀರ್ತನೆ; ಹಾಡು; ಆಸಾಫನದು.
(ಕೀರ್ತ. 57)
1ದೇವರೇ, ಕೊಂಡಾಡುತ್ತೇವೆ;ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು;
ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.
2ದೇವರು ನುಡಿದದ್ದು, <<ನಿಯಮಿತ ಕಾಲವು ಬಂದಾಗ,ನಾನೇ ನೀತಿಯಿಂದ ತೀರ್ಪುಕೊಡುವೆನು.
3ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ,ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ>> ಎಂಬುದು.
ಸೆಲಾ
4ನಾನು ಹೆಮ್ಮೆಗಾರರಿಗೆ, <<ಕೊಚ್ಚಿಕೊಳ್ಳಬೇಡಿರಿ>> ಎಂದು;ದುಷ್ಟರಿಗೆ, <<ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ;
5ಕೊಂಬುಗಳನ್ನು ಮೇಲೆತ್ತಬೇಡಿರಿ;ಸೊಕ್ಕಿನಿಂದ ಮಾತನಾಡಬೇಡಿರಿ>> ಎಂದು ಹೇಳುವೆನು.
6ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ,ಅರಣ್ಯದಿಂದಾಗಲಿ ಬರುವುದಿಲ್ಲ.
7ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು,ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.
8ಯೆಹೋವನ ಕೈಯಲ್ಲಿ ಪಾತ್ರೆ ಇದೆ;ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ.
ಅದರಿಂದ ಹೊಯ್ದು ಹಂಚುತ್ತಾನೆ.
ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.
9ನಾನಾದರೋ ಸದಾ ವರ್ಣಿಸುವವನಾಗಿ,ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.
10ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು;ಆದರೆ ನೀತಿವಂತರ ಕೊಂಬುಗಳನ್ನು ಉನ್ನತಮಟ್ಟಕ್ಕೆ ಎತ್ತಲ್ಪಡುವವು.
76ಮಹಾಭಯಂಕರನಾದ ದೇವರಿಗೆ ಸ್ತುತಿ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಆಸಾಫನ ಹಾಡು.
(ಕೀರ್ತ. 75)
1ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು;ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.
2ಸಾಲೇಮಿನಲ್ಲಿ ಆತನ ಬಿಡಾರವಿದೆ;ಚೀಯೋನಿನಲ್ಲಿ ಆತನು ವಾಸಿಸುತ್ತಾನೆ.
3ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ,ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ.
ಸೆಲಾ
4ನೀನು ತೇಜೋಮಯನು;ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು.
5ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ;ಎಲ್ಲಾ ಶೂರರ ಕೈಗಳು ಬಿದ್ದುಹೋದವು.
6ಯಾಕೋಬ ವಂಶದವರ ದೇವರೇ,ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.
7ನೀನು ಮಹಾಶಕ್ತಿಶಾಲಿ;ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?
8ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,
9ದೇವರು ಲೋಕದ ದೀನರನ್ನು ರಕ್ಷಿಸಿ,ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು
ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು.
ಸೆಲಾ
10ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು;ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ .
11ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ;ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.
12ಆತನು ಭೂಪತಿಗಳಿಗೆ ಭಯಪ್ರದರಾಗಿದ್ದಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.
77ದೇವರ ಮಹತ್ಕಾರ್ಯಗಳ ಧ್ಯಾನ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ಆಸಾಫನ ಕೀರ್ತನೆ.
1ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು;ಆತನು ನನಗೆ ಕಿವಿಗೊಡುವನು.
2ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು;ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು.
ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.
3ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು;ಮನಗುಂದಿದವನಾಗಿಯೇ ಹಂಬಲಿಸುವೆನು.
4ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ.ತಳಮಳಗೊಂಡು ಮಾತನಾಡಲಾರದೆ ಇದ್ದೆನು.
5ಹಳೆಯ ದಿನಗಳನ್ನೂ,ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು.
6ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು,ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು
ನನ್ನ ಮನಸ್ಸಿನಲ್ಲಿ,
7<<ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ?ಆತನು ಪುನಃ ಪ್ರಸನ್ನನಾಗುವುದಿಲ್ಲವೋ?
8ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ?ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?
9ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ?ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?>> ಎಂದು ಅಂದುಕೊಂಡೆನು
ಸೆಲಾ
10ಪುನಃ ನಾನು,<<ಹೀಗೆ ನೆನಸುವುದು ನನ್ನ ಬಲಹೀನತೆಯೇ.
ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು.
11ಯೆಹೋವನ ಕೃತ್ಯಗಳನ್ನು ವರ್ಣಿಸುವೆನು;ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.
12ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು;ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು>> ಅಂದುಕೊಂಡೆನು.
13ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು.ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು?
14ಅದ್ಭುತಗಳನ್ನು ನಡೆಸುವ ದೇವರು ನೀನೇ;ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.
15ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು,ಭುಜಬಲದಿಂದ ಬಿಡುಗಡೆಮಾಡಿದಿ.
ಸೆಲಾ
16ದೇವರೇ, ಜಲರಾಶಿಗಳು ನಿನ್ನನ್ನು ಕಂಡವು;ಕಾಣುತ್ತಲೇ ತಳಮಳಗೊಂಡು
ತಳದವರೆಗೂ ಅಲ್ಲಕಲ್ಲೋಲವಾದವು.
17ಮೇಘಮಂಡಲವು ಮಳೆಗರೆಯಿತು;ಆಕಾಶವು ಗರ್ಜಿಸಿತು;
ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.
18ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು;ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು;
ಭೂಮಿಯು ಅಲ್ಲಾಡಿ ಕಂಪಿಸಿತು.
19ನೀನು ಸಮುದ್ರದಲ್ಲಿ ಮಾರ್ಗಮಾಡಿದಿ;ಮಹಾಜಲರಾಶಿಗಳನ್ನು ದಾಟಿದಿ;
ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.
20ಕುರುಬನು ಕುರಿಹಿಂಡನ್ನು ಹೇಗೋ,ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ,
ನಿನ್ನ ಪ್ರಜೆಯನ್ನು ಮುನ್ನಡೆಸಿದಿ.
78ಇಸ್ರಾಯೇಲರ ಉಪದೇಶಯುಕ್ತವಾದ ಪೂರ್ವಚರಿತ್ರೆ
ಆಸಾಫನ ಪದ್ಯ.
(ಕೀರ್ತ. 105; 106; ಧರ್ಮೋ. 32)
1ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ;ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ.
2ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು.ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು.
3ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು,ಅವರ ಸಂತಾನದವರಿಗೆ ಮರೆಮಾಡದೆ,
4ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು,ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.
5ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು,ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು,
ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, <<ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;
6ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ,ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.
7ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ,ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ,
8ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು,ನನ್ನ ಆಜ್ಞೆಗಳನ್ನು ಕೈಗೊಳ್ಳುವರು>> ಎಂಬುದೇ.
9ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ,ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು.
10ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ,ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.
11ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದಅದ್ಭುತಗಳನ್ನು ಮರೆತುಬಿಟ್ಟರು.
12ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ,ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು.
13ಆತನು ಸಮುದ್ರವನ್ನು ವಿಭಾಗಿಸಿ,ಅದರ ನೀರನ್ನು ರಾಶಿಯಾಗಿ ನಿಲ್ಲುವಂತೆ ಮಾಡಿ, ಅವರನ್ನು ದಾಟಿಸಿದನು.
14ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ,ಆತನು ಅವರನ್ನು ಕರೆದೊಯ್ದನು.
15ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ,ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು.
16ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ,ನದಿಗಳಾಗಿ ಹರಿಯಮಾಡಿದನು.
17ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ,ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.
18ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ,ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು.
19ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ,<<ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?
20ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ,ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ?
ಆತನು ರೊಟ್ಟಿಯನ್ನು ಕೊಡಲು ಶಕ್ತನೋ?
ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ>> ಎಂಬುದೇ.
21ಯೆಹೋವನು ಇದನ್ನು ಕೇಳಿ ರೋಷಗೊಂಡನು.ಅವರು ದೇವರಲ್ಲಿ ಭರವಸವಿಡದೆಯೂ,
ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ,
22ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು;ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು.
23ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು,
24ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ,ಉಣ್ಣಲಿಕ್ಕೆ ಕೊಟ್ಟನು.
25ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು.ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು.
26ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ,ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು,
27ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು;ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು.
28ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು. 29ಅವರು ತಿಂದು ಸಂತೃಪ್ತರಾದರು;ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು.
30ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು,ಅವರು ಅದನ್ನು ಇನ್ನೂ ಸೇವಿಸುತ್ತಿರುವಾಗಲೇ,
31ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು,ಅವರಲ್ಲಿ ಕೊಬ್ಬಿದವರನ್ನು ವಧಿಸಿ,
ಇಸ್ರಾಯೇಲರ ಪ್ರಾಯಸ್ಥರನ್ನು ನೆಲಕ್ಕುರುಳಿಸಿತು.
32ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು;ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು.
33ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ,ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು.
34ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ,ಪುನಃ ಆತನ ಪ್ರಸನ್ನತೆಯನ್ನು ಬಯಸಿ,
35ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು,ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು.
36ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ,ತಮ್ಮ ನಾಲಿಗೆಯಿಂದ ಸುಳ್ಳಾಡಿದರು.
37ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ;ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ.
38ಆದರೂ ಆತನು ಕರುಣಾಳುವೂ,ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ,
ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.
39ಅವರು ಮಾಂಸಮಾತ್ರದವರೂ,ಶ್ವಾಸವನ್ನು ತಿರುಗಿ ಪಡೆಯದವರಾಗಿದ್ದಾರೆ ಎಂಬುದನ್ನು ನೆನಪುಮಾಡಿಕೊಳ್ಳುತ್ತಿದ್ದನು.
40ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ,ಅಲ್ಲಿ ಆತನನ್ನು ನೋಯಿಸಿದರು.
41ಆತನನ್ನು ಪದೇಪದೇ ಪರೀಕ್ಷಿಸಿ,ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು.
42ಅವರು ಆತನ ಭುಜಬಲವನ್ನೂ,ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ,
43ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು,ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.
44ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ,ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು.
45ಅವರನ್ನು ನಾಶಮಾಡುವ ವಿಷದ ಹುಳಗಳನ್ನು,ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು.
46ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ,ಕಷ್ಟಫಲವನ್ನು ಮಿಡತೆಗಳಿಗೂ ಕೊಟ್ಟುಬಿಟ್ಟನು.
47ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ,ಅತ್ತಿಮರಗಳನ್ನು ಕಲ್ಮಳೆಯಿಂದಲೂ ಹಾಳುಮಾಡಿದನು.
48ಅವರ ದನಗಳನ್ನು ಕಲ್ಮಳೆಗೂ,ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು.
49ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು,ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.
50ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕಗೊಡಿಸದೆ,ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು.
51ಹಾಮನ ವಂಶದವರ ಪ್ರಥಮಫಲವಾಗಿರುವಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.
52ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು,ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು.
53ಆತನು ಸುರಕ್ಷಿತವಾಗಿ ನಡೆಸಿದ್ದರಿಂದ ಅವರು ಭಯಪಡಲಿಲ್ಲ;ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು;
54ಅವರನ್ನು ತನ್ನ ಪವಿತ್ರದೇಶಕ್ಕೆ ಅಂದರೆತನ್ನ ಭುಜಬಲದಿಂದ ಸಂಪಾದಿಸಿದ ಈ ಪರ್ವತಸೀಮೆಗೆ ಕರೆದುಕೊಂಡು ಬಂದನು.
55ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು,ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು,
ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.
56ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು.ಆತನ ವಿಧಿಗಳನ್ನು ಕೈಗೊಳ್ಳದೆ,
57ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು.ಮೋಸದ ಬಿಲ್ಲಿನಂತೆ ತಿರುಗಿಕೊಂಡರು.
58ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ,ವಿಗ್ರಹಗಳಿಂದ ರೇಗಿಸಿದರು.
59ದೇವರು ಇದನ್ನು ತಿಳಿದು ರೌದ್ರನಾಗಿಇಸ್ರಾಯೇಲರನ್ನು ಸಂಪೂರ್ಣವಾಗಿ ನಿರಾಕರಿಸಿಬಿಟ್ಟನು.
60ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ,ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು,
61ತನ್ನ ಪ್ರತಾಪವನ್ನು ಸೆರೆಯಾಗುವುದಕ್ಕೂ,ಮಹಿಮೆಯನ್ನು ವಿರೋಧಿಗಳಿಗೂ ಒಪ್ಪಿಸಿಬಿಟ್ಟನು.
62ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ,ತನ್ನ ಬಾಧ್ಯತೆಯ ಮೇಲೆ ಉಗ್ರನಾದನು.
63ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು;ಅವರ ಕನ್ಯೆಯರು ವಿವಾಹವಾಗಲಿಲ್ಲ.
64ಯಾಜಕರು ಕತ್ತಿಯಿಂದ ಸಂಹೃತರಾದರು;ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ.
65ಆ ವರೆಗೆ ನಿದ್ರಿಸುವವನಂತೆಯೂ,ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚೆತ್ತು,
66ತನ್ನ ಶತ್ರುಗಳನ್ನು ಸದೆಬಡಿದು,ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು.
67ಯೋಸೇಫನ ಕುಲದ ಗುಡಾರವನ್ನು ತಿರಸ್ಕರಿಸಿ,ಎಫ್ರಾಯೀಮ್ ಕುಲವನ್ನು ತ್ಯಜಿಸಿ,
68ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.
69ಆತನು ತನ್ನ ಆಲಯವನ್ನು ಪರ್ವತದಂತೆಯೂ,ತಾನು ಸ್ಥಾಪಿಸಿದ ಭೂಮಿಯಂತೆಯೂ ಶಾಶ್ವತವಾಗಿ ಕಟ್ಟಿದನು.
70ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು,ಕುರಿಹಟ್ಟಿಯಿಂದ ತೆಗೆದುಕೊಂಡು,
71ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ,ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ
ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು.
72ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ,ತನ್ನ ಹಸ್ತಕೌಶಲ್ಯದಿಂದ ನಡೆಸಿದನು.
79ಮ್ಲೇಚ್ಛರಿಗೆ ದಂಡನೆಯಾಗಬೇಕೆಂಬ ಪ್ರಾರ್ಥನೆ
ಆಸಾಫನ ಕೀರ್ತನೆ.
(ಕೀರ್ತ. 74)
1ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು,ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು;
ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.
2ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು;ನಿನ್ನ ಭಕ್ತರ ದೇಹವನ್ನು ಕಾಡುಮೃಗಗಳಿಗೆ ಹಾಕಿದರು.
3ಯೆರೂಸಲೇಮಿನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು;ಅವರನ್ನು ಹೂಣಿಡುವವರು ಯಾರೂ ಇರಲಿಲ್ಲ.
4ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು;ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.
5ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ?ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ?
6ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ,ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ,
ನಿನ್ನ ರೌದ್ರವನ್ನು ಸುರಿದುಬಿಡು.
7ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು,ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ.
8ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ.ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ;
ಬಹಳವಾಗಿ ಕುಗ್ಗಿಹೋಗಿದ್ದೇವೆ.
9ನಮ್ಮನ್ನು ರಕ್ಷಿಸುವ ದೇವರೇ,ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು;
ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.
10ಮ್ಲೇಚ್ಛರು, <<ಅವರ ದೇವರು ಎಲ್ಲಿ?>> ಎಂದು ಕೇಳುವುದೇಕೆ?ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು,
ಜನಾಂಗಗಳಿಗೆ ಗೊತ್ತಾಗಲಿ.
11ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ;ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.
12ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ,ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.
13ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ,ಸದಾ ನಿನ್ನನ್ನು ಸ್ತುತಿಸುವವರಾಗಿ,
ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು.
80ದ್ರಾಕ್ಷಾಲತೆಯಂತಿರುವ ಇಸ್ರಾಯೇಲರನ್ನು ಪುನಃ ಸ್ಥಾಪಿಸಬೇಕೆಂಬ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಶೋಶನ್ನೀಮ್ ಎದೂತೆಂಬ ರಾಗ. ಆಸಾಫನ ಕೀರ್ತನೆ.
1ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು;ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ,
ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.
2ಎಫ್ರಾಯೀಮ್, ಬೆನ್ಯಾಮೀನ್ ಮತ್ತು ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ,ನಿನ್ನ ಶೌರ್ಯವನ್ನು ತೋರ್ಪಡಿಸು;
ಬಂದು ನಮಗೆ ಜಯಪ್ರದನಾಗು.
3ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು.ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
4ಸೇನಾಧೀಶ್ವರನಾದ ಯೆಹೋವ ದೇವರೇ,ನಿನ್ನ ಪ್ರಜೆಗಳು ಪ್ರಾರ್ಥಿಸುವಾಗ ನೀನು ಇನ್ನೆಷ್ಟರವರೆಗೆ ಕೋಪಿಸಿಕೊಳ್ಳುವಿ?
5ರೋದನವೇ ಅವರ ಆಹಾರವಾಗುವಂತೆಯೂ,ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ.
6ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ,ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ.
7ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು.ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
8ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು,ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ.
9ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ,ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.
10ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು.ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು.
11ಅದರ ಕೊಂಬೆಗಳು ಸಮುದ್ರದವರೆಗೂ,ಅದರ ಚಿಗುರುಗಳು ಮಹಾನದಿಯವರೆಗೂ ಹರಡಿಕೊಂಡವು.
12ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ?ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ.
13ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ;ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.
14ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು;ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು.
15ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.
16ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ.ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ.
17ನಿನ್ನ ಬಲಗೈ ಉದ್ಧರಿಸಿದ ಪುರುಷನೂ,ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು,
ನಿನ್ನ ಹಸ್ತದಿಂದ ಹಿಡಿದಿರು.
18ಆಗ ನಾವು ನಿನ್ನಿಂದ ಅಗಲುವುದಿಲ್ಲ.ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.
19ಸೇನಾಧೀಶ್ವರನಾದ ಯೆಹೋವ ದೇವರೇ,ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು;
ಆಗ ಉದ್ಧಾರವಾಗುವೆವು.
81ದೇವಭಕ್ತಿಯ ವಿಷಯದಲ್ಲಿ ಪ್ರೋತ್ಸಾಹ ಮತ್ತು ಎಚ್ಚರಿಕೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಆಸಾಫನ ಕೀರ್ತನೆ.
(ಧರ್ಮೋ. 32; ಕೀರ್ತ. 8; 84)
1ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ;ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.
2ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ;ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.
3ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ. 4ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ;ಇದು ಯಾಕೋಬ್ಯರ ದೇವರು ವಿಧಿಸಿದ್ದು.
5ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ,ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು.
ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ,
6<<ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು;ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.
7ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು;ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು;
ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು.
ಸೆಲಾ.
8ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ,ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,
9ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು;ಪರರ ದೇವತೆಗಳನ್ನು ಪೂಜಿಸಬಾರದು;
10ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು;ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.
11ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ;ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.
12ಆದುದರಿಂದ ಇವರು ಹಟಮಾರಿಗಳು;ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.
13ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ,ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!
14ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ,ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು.
15ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು;ಅವರಾದರೋ ಸದಾಕಾಲವೂ ಇರುವರು.
16ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು,ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು>> ಎಂಬುದೇ.
82ಅನೀತಿವಂತರಾದ ಅಧಿಪತಿಗಳಿಗೆ ನ್ಯಾಯ ವಿಧಿಸುವ ದೇವರು
ಆಸಾಫನ ಕೀರ್ತನೆ.
(ಕೀರ್ತ. 58)
1ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ,ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.
2<<ನೀವು ಅನ್ಯಾಯವಾಗಿ ತೀರ್ಪುಕೊಡುವುದೂ,ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ?
ಸೆಲಾ.
3ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ,ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.
4ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.>> 5ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ.ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
6<<ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು,
7ಆದರೂ ನರರಂತೆ ಸತ್ತೇ ಹೋಗುವಿರಿ,ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ>>
ಎಂದು ನಾನು ಹೇಳಿದೆನು.
8ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು.ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?
83ಇಸ್ರಾಯೇಲ್ ವಿರೋಧಿಗಳ ಸೋಲಿಗಾಗಿ ಪ್ರಾರ್ಥನೆ
ಆಸಾಫನ ಕೀರ್ತನೆ; ಗೀತೆ.
1ದೇವರೇ, ಸುಮ್ಮನಿರಬೇಡ!ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ.
2ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ;ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ.
3ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ,ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ,
4<<ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ,ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ,
ಅವರನ್ನು ಸಂಹರಿಸೋಣ>> ಅಂದುಕೊಳ್ಳುತ್ತಾರೆ.
5ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು,ಮೋವಾಬ್ಯರು, ಹಗ್ರೀಯರು,
6ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು,ಫಿಲಿಷ್ಟಿಯರು, ತೂರ್ ಸಂಸ್ಥಾನದವರು,
7ಇವರೆಲ್ಲಾ ಏಕಮನಸ್ಸಿನಿಂದ ಕೂಡಿ,ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ;
8ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು,ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ.
ಸೆಲಾ
9ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು.ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ,
ಇವರಿಗೂ ಮಾಡು.
10ಅವರು ಎಂದೋರಿನಲ್ಲಿ ವಧಿಸಲ್ಪಟ್ಟು,ಹೊಲದ ಗೊಬ್ಬರವಾಗಿ ಹೋದರಲ್ಲಾ.
11ಓರೇಬ್ ಮತ್ತು ಜೇಬ್ ಎಂಬವರ ಗತಿಯು,ಇವರ ಶ್ರೀಮಂತರಿಗೂ ಸಂಭವಿಸಲಿ;
ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.
12ಅವರು <<ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ>>ಅಂದುಕೊಳ್ಳುತ್ತಾರಲ್ಲಾ.
13ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ,ಹಾರಿಹೋಗುವ ಹೊಟ್ಟಿನಂತೆಯೂ ಮಾಡು.
14ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ,ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು,
15ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು;ತುಫಾನಿನಿಂದ ಅವರನ್ನು ಕಳವಳಗೊಳಿಸು.
16ನಾಚಿಕೆಯು ಅವರ ಮುಖವನ್ನು ಕವಿಯಲಿ.ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು.
17ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ;ಅಪಮಾನದಿಂದ ನಾಶವಾಗಲಿ.
18ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.
84ದೇವಾಲಯದ ಯಾತ್ರಿಕರ ಕೀರ್ತನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಕೋರಹೀಯರ ಕೀರ್ತನೆ.
(ಕೀರ್ತ. 8; 81)
1ಸೇನಾಧೀಶ್ವರನಾದ ಯೆಹೋವನೇ,ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!
2ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು,ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು.
ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ
ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.
3ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ,ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ,
ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ!
4ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು.ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ.
ಸೆಲಾ
5ನಿನ್ನಲ್ಲೇ ಬಲವನ್ನು ಹೊಂದುವ ಮನುಷ್ಯರು ಧನ್ಯರು.ಅವರು ಯಾತ್ರಿಕರಾಗಿ,
6ಕಣ್ಣೀರಿನ ತಗ್ಗನ್ನು ದಾಟುವಾಗ,ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ.
ಮುಂಗಾರು ಮಳೆಯು ಅದನ್ನು ಸಮೃದ್ಧಿಗೊಳಿಸುತ್ತದೆ.
7ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ,ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,
8<<ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು;ಯಾಕೋಬ್ಯರ ದೇವರೇ, ಕಿವಿಗೊಡು>> ಅನ್ನುತ್ತಾರೆ.
ಸೆಲಾ
9ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು;ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು.
10ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು,ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ.
ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ
ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.
11ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ.ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು;
ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?
12ಸೇನಾಧೀಶ್ವರನಾದ ಯೆಹೋವನೇ,ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
85ಸಂಪೂರ್ಣ ರಕ್ಷಣೆಯನ್ನು ನಿರೀಕ್ಷಿಸುವ ಭಕ್ತನ ವಿಜ್ಞಾಪನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ.
1ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ;ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.
2ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ;ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ.
ಸೆಲಾ
3ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ;ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.
4ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು;ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.
5ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ?ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?
6ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ,ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ?
7ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು;ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು.
8ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ.ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ.
ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.
9ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ.ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.
10ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು;ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.
11ಸತ್ಯತೆಯು ಭೂಮಿಯಿಂದ ಹುಟ್ಟುವುದು;ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
12ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು;ನಮ್ಮ ದೇಶವು ತನ್ನ ಬೆಳೆ ಕೊಡುವುದು.
13ನೀತಿಯು ಆತನ ಮುಂದೆ ಹೋಗುತ್ತಾ,ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.
86ಶತ್ರಪೀಡಿತನ ವಿಜ್ಞಾಪನೆ
ದಾವೀದನ ಕೀರ್ತನೆ.
(ಕೀರ್ತ. 25)
1ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು;ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ.
2ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು;ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು.
3ಕರ್ತನೇ, ಕರುಣಿಸು;ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ.
4ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು;ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ.
5ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ,ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.
6ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು;ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು.
7ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ,ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು.
8ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ;ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.
9ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು,ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.
10ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು;ನೀನೊಬ್ಬನೇ ದೇವರು.
11ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು;ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು.
ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.
12ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು;ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು.
13ನೀನು ಬಹಳವಾಗಿ ಕನಿಕರಿಸಿ,ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.
14ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ;ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ.
ಅವರು ನಿನ್ನನ್ನು ಲಕ್ಷಿಸುವುದಿಲ್ಲ.
15ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು;ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.
16ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು;ನಿನ್ನ ಸೇವಕಳ ಮಗನನ್ನು ರಕ್ಷಿಸು.
17ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು;ನನ್ನ ಶತ್ರುಗಳು ನೋಡಿ, <<ಯೆಹೋವನು ಸಹಾಯಕನಾಗಿ
ಇವನನ್ನು ಸಂತೈಸಿದ್ದಾನೆ>> ಎಂದು ನಾಚಿಕೆಪಡಲಿ.
87ಚೀಯೋನೇ ಎಲ್ಲಾ ದೇವಜನರ ಮಾತೃಭೂಮಿ
ಕೋರಹೀಯರ ಕೀರ್ತನೆ; ಗೀತೆ.
(ಯೆಶಾ. 2:2-4; 19:19-24)
1ಯೆಹೋವನು ಸ್ಥಾಪಿಸಿದ ಪಟ್ಟಣವುಪರಿಶುದ್ಧ ಪರ್ವತದ ಮೇಲಿದೆ.
2ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ,ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.
3ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ, 4<<ರಹಬ , ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು.ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು>> ಎಂಬುದೇ.
5ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು;ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು.
6ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ,<<ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು>> ಎಂದು ಬರೆಯುವನು.
ಸೆಲಾ
7ಇವರು ಹಾಡುತ್ತಾ, ಕುಣಿಯುತ್ತಾ,<<ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ>> ಎಂದು ಹೇಳುವರು.
88ದುಃಖತಪ್ತನ ಮೊರೆ
ಹಾಡು; ಕೋರಹೀಯರ ಕೀರ್ತನೆ; ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ಜೇರಹ ಕುಲದವನಾದ ಹೇಮಾನನ ಪದ್ಯ.
(ಪ್ರಲಾ. 3)
1ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ,ಹಗಲಿರುಳು ನಿನಗೆ ಮೊರೆಯಿಡುತ್ತೇನೆ.
2ನನ್ನ ಪ್ರಾರ್ಥನೆಯು ನಿನ್ನ ಸನ್ನಿಧಿಯನ್ನು ಮುಟ್ಟಲಿ;ಕಿವಿಗೊಟ್ಟು ನನ್ನ ಕೂಗನ್ನು ಕೇಳು.
3ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು;ನನ್ನ ಪ್ರಾಣವು ಪಾತಾಳಕ್ಕೆ ಹತ್ತಿರವಾಯಿತು.
4ಸಮಾಧಿಯಲ್ಲಿ ಸೇರುವವರೊಳಗೆ ಎಣಿಸಲ್ಪಟ್ಟಿದ್ದೇನೆ;ನಿತ್ರಾಣ ಮನುಷ್ಯನಂತಿದ್ದೇನೆ.
5ಸತ್ತವನ ಹಾಗೆ ನನ್ನನ್ನು ಹೊರಗೆ ಹಾಕಿದ್ದಾರೆ;ಹತನಾದವನಂತೆ ಸಮಾಧಿಯಲ್ಲಿ ಬಿದ್ದಿದ್ದೇನೆ.
ಹತರಾದವರು ನಿನ್ನ ಪರಿಪಾಲನೆ ಇಲ್ಲದವರು;
ಅಂಥವರನ್ನು ನೀನು ನೆನಪು ಮಾಡಿಕೊಳ್ಳುವುದಿಲ್ಲ.
6ಅಧೋಲೋಕದಲ್ಲಿಯೂ, ಗಾಢಾಂಧಕಾರದಲ್ಲಿಯೂ,ಅಗಾಧ ಸ್ಥಳದಲ್ಲಿಯೂ ನನ್ನನ್ನು ತಳ್ಳಿಬಿಟ್ಟಿದ್ದಿ.
7ನಿನ್ನ ಕೋಪಭಾರವು ನನ್ನನ್ನು ಕುಗ್ಗಿಸಿಬಿಟ್ಟಿದೆ;ನಿನ್ನ ಎಲ್ಲಾ ತೆರೆಗಳಿಂದ ನನ್ನನ್ನು ಬಾಧಿಸಿದ್ದಿ.
ಸೆಲಾ
8ನನ್ನ ಆಪ್ತರು ನನ್ನನ್ನು ನೋಡಿ ಅಸಹ್ಯಪಟ್ಟರು,ನನ್ನನ್ನು ಅವರು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ;
ಸಿಕ್ಕಿಬಿಟ್ಟಿದ್ದೇನೆ, ಬಿಡಿಸಿಕೊಳ್ಳಲಾರೆನು.
9ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ.ಯೆಹೋವನೇ, ಹಗಲೆಲ್ಲಾ ಕೈಚಾಚಿ ನಿನಗೆ ಮೊರೆಯಿಡುತ್ತೇನೆ.
10ನೀನು ಸತ್ತವರಿಗೆ ಅದ್ಭುತಕಾರ್ಯಗಳನ್ನು ತೋರಿಸುವಿಯೋ?ಪ್ರೇತಗಳು ಎದ್ದು ನಿನ್ನನ್ನು ಕೊಂಡಾಡುವವೋ?
ಸೆಲಾ
11ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ,ನಾಶನಲೋಕದಲ್ಲಿ ನಿನ್ನ ಸತ್ಯತೆಯನ್ನು ಸಾರುವುದುಂಟೋ?
12ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ,ಮರೆಯುವ ದೇಶದಲ್ಲಿ ನಿನ್ನ ನೀತಿಯು ತಿಳಿಯಲ್ಪಡುವವೋ?
13ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ;ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು.
14ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ?ನಿನ್ನ ಮುಖವನ್ನು ಮರೆಮಾಡಿದ್ದೇಕೆ?
15ಯೌವನಾರಭ್ಯ ಕುಗ್ಗಿದವನೂ, ಮೃತಪ್ರಾಯನೂ,ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.
16ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದಿದೆ;ನಿನ್ನಿಂದುಂಟಾದ ದಿಗಿಲಿನಿಂದ ಹಾಳಾದೆನು.
17ಅವು ದಿನವೆಲ್ಲಾ ನೀರಿನಂತೆ ನನ್ನನ್ನು ಆವರಿಸಿಕೊಂಡಿವೆ;ಒಟ್ಟುಗೂಡಿ ನನ್ನನ್ನು ಸುತ್ತಿಬಿಟ್ಟಿವೆ.
18ನನ್ನ ಆಪ್ತಮಿತ್ರರನ್ನು ದೂರಮಾಡಿದಿ;ಅಂಧಕಾರವೇ ನನ್ನ ಒಡನಾಡಿ.
89ಸರ್ವಶಕ್ತನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಪ್ರಾರ್ಥನೆ
ಜೇರಹ ಕುಲದವನಾದ ಏತಾನನ ಪದ್ಯ.
(2 ಸಮು. 7; ಕೀರ್ತ. 44; 80)
1ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು;ನನ್ನ ಬಾಯಿ ನಿನ್ನ ಸತ್ಯವನ್ನು,
ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು.
2ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು;ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ.
3ನೀನು ನುಡಿದದ್ದೇನೆಂದರೆ, <<ನಾನು ಆರಿಸಿಕೊಂಡಸೇವಕನಾದ ದಾವೀದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು,
4<ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು,ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು
ಎಂದು ಹೇಳಿದ್ದೇನೆ> >> ಎಂಬುವುದೇ.
ಸೆಲಾ
5ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು;ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.
6ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು?ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?
7ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು;ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.
8ಯೆಹೋವನೇ, ಸೇನಾಧೀಶ್ವರನಾದ ದೇವರೇ,ನಿನಗೆ ಸಮಾನರು ಯಾರು?
ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.
9ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು;ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.
10ರಹಬನ್ನು ಛೇದಿಸಿ ಸಾಯಿಸಿದವನು ನೀನು;ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ.
11ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ;ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು.
12ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು.ತಾಬೋರ್ , ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.
13ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು;ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ.
14ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು;ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ.
15ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು;ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.
16ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ;ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ.
17ಅವರು ಹಿಗ್ಗುವ ಬಲವು ನೀನೇ.ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವುದು.
18ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ;ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು.
19ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ,<<ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ;
ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.
20ನನ್ನ ಸೇವಕನಾದ ದಾವೀದನನ್ನು ಕಂಡು,ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.
21ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು;ನನ್ನ ಭುಜವು ಅವನನ್ನು ಬಲಪಡಿಸುವುದು.
22ವೈರಿಯ ಕುತಂತ್ರವು ಅವನಲ್ಲಿ ಸಾಗದು;ಯಾವ ಕೆಡುಕನೂ ಅವನನ್ನು ಕುಗ್ಗಿಸಲಾರನು.
23ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿ ಹಾಕುವೆನು;ಅವನ ದ್ವೇಷಿಗಳನ್ನು ಹತಮಾಡಿಬಿಡುವೆನು.
24ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು;ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು.
25ಸಮುದ್ರದಿಂದ ನದಿಗಳವರೆಗೂ ಅವನ ಹಸ್ತಕ್ಕೆ ಅಧಿಕಾರವನ್ನು ಕೊಡುವೆನು.
26ಅವನು ನನಗೆ, <ನನ್ನ ತಂದೆಯೂ, ದೇವರೂ,ಆಶ್ರಯದುರ್ಗವೂ ನೀನೇ> ಎಂದು ಹೇಳುವನು.
27ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ,ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.
28ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು;ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.
29ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು.ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.
30ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು,ನನ್ನ ಆಜ್ಞೆಗಳಲ್ಲಿ ನಡೆಯದೆ,
31ನನ್ನ ವಿಧಿಗಳನ್ನು ಮೀರಿ, ನನ್ನ ನೇಮಗಳನ್ನು ಪಾಲಿಸದೆ ಹೋದರೆ,
32ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು;ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.
33ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವುದಿಲ್ಲ;ನನ್ನ ನಂಬಿಗಸ್ತಿಕೆಯಿಂದ ಜಾರುವುದಿಲ್ಲ.
34ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ;ನನ್ನ ಮಾತನ್ನು ಬದಲಿಸುವುದಿಲ್ಲ.
35ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ;ಅದರ ವಿಷಯದಲ್ಲಿ ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.
36ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು;ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,
37ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವುದು.ಪರಲೋಕದ ಸಾಕ್ಷಿ ಸತ್ಯವೇ ಸರಿ.>>
ಸೆಲಾ.
38ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ಕೋಪಗೊಂಡವನಾಗಿ,ಅವನನ್ನು ಅಸಹ್ಯಿಸಿ ತಳ್ಳಿಬಿಟ್ಟಿದ್ದೀ.
39ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ,ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ.
40ಅವನ ದೇಶದ ಮೇರೆಗಳನ್ನು ಕೆಡವಿ, ಕೋಟೆಗಳನ್ನು ಹಾಳುಮಾಡಿದ್ದೀ. 41ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ;ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.
42ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ;ಅವನ ವೈರಿಗಳಿಗೆಲ್ಲಾ ಆನಂದವಾಗುವಂತೆ ಮಾಡಿದ್ದೀ.
43ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ;ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.
44ಅವನ ವೈಭವವನ್ನು ತಡೆದುಬಿಟ್ಟಿದ್ದೀ;ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ.
45ಅವನ ಯೌವನದ ದಿನಗಳನ್ನು ಬೇಗ ಮುಗಿಸಿ,ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದಿ.
ಸೆಲಾ
46ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ?ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?
47ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ,ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ.
48ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆಚಿರಂಜೀವಿಯಾಗಿರುವವರು ಯಾರು?
ಸೆಲಾ
49ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು,ದಾವೀದನಿಗೆ ವಾಗ್ದಾನಮಾಡಿ ನಡೆಸುತ್ತಿದ್ದ ಹಿಂದಿನ ಕೃಪಾಕಾರ್ಯಗಳು ಎಲ್ಲಿ?
50ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ;ನಿನ್ನ ಅಭಿಷಿಕ್ತನನ್ನು ಹೆಜ್ಜೆ ಹೆಜ್ಜೆಗೂ ಅಪಮಾನ ಮಾಡುತ್ತಾರೆ.
51ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ,ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವುದನ್ನೂ ಜ್ಞಾಪಿಸಿಕೋ.
52ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.
90ಚತುರ್ಥ ಭಾಗ (90-106)
ಪಾಪಾತ್ಮರಿಗೆ ದೇವರ ದಯವೇ ಆಶ್ರಯ
ದೇವರ ಮನುಷ್ಯನಾದ ಮೋಶೆಯ ಪ್ರಾರ್ಥನೆ.
(ಧರ್ಮೋ. 32)
1ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.
2ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ,ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ,
ಯುಗಯುಗಾಂತರಗಳಲ್ಲಿಯೂ ನೀನೇ ದೇವರು.
3<<ಮನುಷ್ಯರೇ, ಸಾಯಿರಿ>> ಎಂದು ಆಜ್ಞಾಪಿಸಿ,ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ.
4ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿಗತಿಸಿಹೋದ ನಿನ್ನೆಯ ದಿನದಂತೆಯೂ,
ರಾತ್ರಿಯ ಜಾವದಂತೆಯೂ ಇವೆ.
5ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ;ಅವರು ನಿದ್ರೆಗೆ ಸಮಾನರೇ.
ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.
6ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ;ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.
7ನಿನ್ನ ಕೋಪದಿಂದ ನಾವು ಇಲ್ಲವಾದೆವು;ನಿನ್ನ ರೌದ್ರದಿಂದ ತಲ್ಲಣಗೊಂಡೆವು.
8ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ,ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.
9ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು;ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು.
10ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ,ಬಲ ಹೆಚ್ಚಿದರೆ ಎಂಭತ್ತು;
ಕಷ್ಟಸಂಕಟಗಳೇ ಅದರ ಆಡಂಬರ.
ಅದು ಬೇಗನೆ ಗತಿಸಿಹೋಗುತ್ತದೆ;
ನಾವು ಹಾರಿ ಹೋಗುತ್ತೇವೆ.
11ನಿನ್ನ ಕೋಪದ ಬಲವನ್ನೂ,ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?
12ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು;ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.
13ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ;ಎಷ್ಟರವರೆಗೆ ಕೋಪ ಮಾಡುವಿ?
ನಿನ್ನ ಸೇವಕರ ಮೇಲೆ ಕರುಣೆಯಿರಲಿ.
14ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು;ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
15ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ,ನಾವು ಕೇಡನ್ನು ಅನುಭವಿಸಿದ ವರ್ಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು.
16ನಿನ್ನ ಸೇವಕರಿಗೆ ನಿನ್ನ ರಕ್ಷಣಾ ಕಾರ್ಯವೂ,ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ತೂ ಪ್ರಕಟವಾಗಲಿ.
17ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ.ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು;
ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು.
91ದೇವಾಶ್ರಿತನು ಸುರಕ್ಷಿತನು
(ವಿಮೋ. 23:20-26)
1ಅತ್ಯುನ್ನತನಾದ ದೇವರ ಮೊರೆಹೊಕ್ಕವನು,ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
2ನಾನು ಯೆಹೋವನಿಗೆ, <<ನೀನೇ ನನ್ನ ಶರಣನು, ನನ್ನ ದುರ್ಗವು,ನಾನು ಭರವಸವಿಟ್ಟಿರುವ ನನ್ನ ದೇವರು>> ಎಂದು ಹೇಳುವೆನು.
3ನನ್ನನ್ನು ಬೇಟೆಗಾರನ ಬಲೆಯಿಂದಲೂ,ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.
4ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು;ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ.
ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.
5ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ,ಹಗಲಲ್ಲಿ ಹಾರಿಬರುವ ಬಾಣಕ್ಕೂ,
6ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ,ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ.
7ನಿನ್ನ ಮಗ್ಗುಲಲ್ಲಿ ಸಾವಿರ ಜನರು,ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು.
8ನೀನು ಅದನ್ನು ಕಣ್ಣಾರೆ ಕಂಡು,ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.
9ಯೆಹೋವನೇ ನನ್ನ ಶರಣನು!ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ.
10ಯಾವ ಕೇಡೂ ನಿನಗೆ ಸಂಭವಿಸದು;ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು.
11ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.
12ನಿನ್ನ ಕಾಲು ಕಲ್ಲಿಗೆ ತಗಲದಂತೆ,ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.
13ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ;ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ.
14ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು;ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.
15ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು;ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;
16ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು;ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.
92ದೇವರ ನೀತಿಸಾಧನೆಗಳನ್ನು ಹೊಗಳುವುದು
ಕೀರ್ತನೆ; ಸಬ್ಬತ್ ದಿನದ ಗೀತೆ.
1ಯೆಹೋವನೇ, ನಿನ್ನನ್ನು ಕೊಂಡಾಡುವುದೂ,ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.
2ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,
3ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ,ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.
4ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ;ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.
5ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ;ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.
6ಪಶುಪ್ರಾಯನು ಅರಿಯನು;ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.
7ದುಷ್ಟರು ಹುಲ್ಲಿನಂತೆ ಬೆಳೆಯುವುದೂ,ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
8ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.
9ಯೆಹೋವನೇ, ಇಗೋ ನಿನ್ನ ಶತ್ರುಗಳು!ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.
10ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.
11ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ;ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.
12ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು;ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.
13ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು,ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.
14ಮುಪ್ಪಿನಲ್ಲಿಯೂ ಫಲಿಸುವರು;ಪುಷ್ಟಿಯಾಗಿದ್ದು ಶೋಭಿಸುವರು.
15ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು.ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.
93ಯೆಹೋವನೇ ನಿತ್ಯಕ್ಕೂ ರಾಜಾಧಿರಾಜನು
(ವಿಮೋ. 15; ಯೆಶಾ. 52:7; ಕೀರ್ತ. 96; 97; 99)
1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ,
ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ;
ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.
2ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ;ಯುಗಯುಗಾಂತರದಿಂದಲೂ ನೀನು ಇರುವಿ.
3ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು;ನದಿಗಳು ಘೋಷಿಸುತ್ತವೆ.
4ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ,ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.
5ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ;ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
94ದೇವರ ಶಿಕ್ಷೆ ಮತ್ತು ರಕ್ಷಣೆಗೆ ಒಳಗಾದವನು ಧನ್ಯನು
1ಯೆಹೋವನೇ, ಮುಯ್ಯಿತೀರಿಸುವ ದೇವರೇ,ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.
2ಲೋಕದ ನ್ಯಾಯಾಧಿಪತಿಯೇ, ಏಳು;ಗರ್ವಿಷ್ಠರಿಗೆ ತಕ್ಕ ಶಿಕ್ಷೆಯನ್ನು ಕೊಡು.
3ಯೆಹೋವನೇ, ದುಷ್ಟರು ಎಲ್ಲಿಯವರೆಗೆ,ದುಷ್ಟರು ಎಲ್ಲಿಯವರೆಗೆ ಹಿಗ್ಗುತ್ತಿರಬೇಕು?
4ಕೆಡುಕರೆಲ್ಲರು ಉಬ್ಬಿಕೊಂಡು,ಅಹಂಕಾರವನ್ನು ಕಕ್ಕುತ್ತಾರೆ.
5ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ;ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ;
6ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ;ಅನಾಥರನ್ನು ಹತಮಾಡುತ್ತಾರೆ.
7ಅವರು, <<ಯಾಹುವು ನೋಡುವುದೇ ಇಲ್ಲ;ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ>> ಅನ್ನುತ್ತಾರೆ.
8ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ;ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?
9ಕಿವಿಮಾಡಿದವನು ಕೇಳನೋ?ಕಣ್ಣುಕೊಟ್ಟವನು ನೋಡನೋ?
10ಜನಾಂಗಗಳನ್ನು ಶಿಕ್ಷಿಸುವವನೂ,ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?
11ಮನುಷ್ಯನ ಯೋಚನೆಗಳು, <<ಉಸಿರೇ>> ಎಂದು ಯೆಹೋವನು ತಿಳುಕೊಳ್ಳುತ್ತಾನೆ. 12ಯಾಹುವೇ, ನೀನು ಯಾರನ್ನು ಶಿಕ್ಷಿಸಿ,ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.
13ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ,ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.
14ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ;ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.
15ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು;ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.
16ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು?ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?
17ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.
18ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ,ನಿನ್ನ ಕೃಪೆಯು ನನಗೆ ಆಧಾರವಾಯಿತು.
19ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ,ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.
20ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ,ನಿನಗೂ ಸಂಬಂಧವೇನು?
21ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ;ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.
22ಆದರೆ ಯೆಹೋವನು ನನ್ನ ದುರ್ಗವೂ,ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ.
23ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು;ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು.
ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು.
95ದೇವರನ್ನು ವಿಶ್ವಾಸದಿಂದ ಆರಾಧಿಸುವುದು
(ಕೀರ್ತ. 81; 96—100)
1ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ;ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.
2ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ;ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
3ಯೆಹೋವನು ಮಹಾದೇವರೂ,ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
4ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ;ಪರ್ವತಶಿಖರಗಳು ಆತನವೇ.
5ಆತನೇ ಸಮುದ್ರವನ್ನು ನಿರ್ಮಿಸಿದವನು;ಅದು ಆತನದೇ, ಒಣನೆಲವು ಆತನ ಕೈಕೆಲಸವೇ.
6ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆಸಾಷ್ಟಾಂಗವೆರಗಿ ಆರಾಧಿಸೋಣ.
7ಆತನು ನಮ್ಮ ದೇವರು;ನಾವೋ ಆತನು ಪಾಲಿಸುವ ಪ್ರಜೆಯೂ,
ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ.
ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.
8ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ ,ಮಸ್ಸಾದಲ್ಲಿ ಮಾಡಿದ ದಿನದಂತೆ,
ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.
9ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು;ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.
10ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು;<<ಈ ಜನರು ಹೃದಯದಲ್ಲಿ ತಪ್ಪಿಹೋಗುವವರು,
ನನ್ನ ಆಜ್ಞೆಗಳಿಗೆ ವಿಧೇಯರಾಗದವರು >> ಎಂದು ಹೇಳಿದೆನು.
11ಆದುದರಿಂದ ಇವರು, <<ನನ್ನ ವಿಶ್ರಾಂತಿಯಲ್ಲಿ ಸೇರಬಾರದು>> ಎಂದುಕೋಪಗೊಂಡು ಪ್ರಮಾಣಮಾಡಿದೆನು.
96ರಾಜಾಧಿರಾಜನಾದ ಯೆಹೋವನ ಆಗಮನ
(1 ಪೂರ್ವ. 16:23-33)
1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ;ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ.
2ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ.ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.
3ಜನಾಂಗಗಳಲ್ಲಿ ಆತನ ಘನತೆಯನ್ನೂ,ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.
4ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ;ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು.
5ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ;ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.
6ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ,ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ.
7ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ,ಎಂದು ಹೇಳಿ ಆತನನ್ನು ಘನಪಡಿಸಿರಿ.
8ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ;ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ.
9ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ;ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ.
10ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ;
ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು
ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
11ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ;ಭೂಲೋಕವು ಸಂತೋಷಿಸಲಿ;
ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.
12ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ;ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ.
13ಆತನು ಬರುತ್ತಾನೆ;ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ.
ಆತನು ಲೋಕಕ್ಕೆ ನೀತಿಗನುಸಾರವಾಗಿಯೂ,
ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.
97ಸಾರ್ವಭೌಮನಾದ ಯೆಹೋವನನ್ನು ಸ್ತುತಿಸುವುದು
1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;ಭೂಲೋಕವು ಸಂತೋಷಿಸಲಿ;
ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.
2ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ;ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ .
3ಬೆಂಕಿಯು ಆತನ ಮುಂದೆ ಹೋಗಿ,ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ.
4ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು;ಭೂಮಿಯು ಅದನ್ನು ಕಂಡು ನಡುಗಿತು.
5ಸಾರ್ವಭೌಮನಾದ ಯೆಹೋವನ ಎದುರಿನಲ್ಲಿಪರ್ವತಗಳು ಮೇಣದಂತೆ ಕರಗಿಹೋದವು.
6ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು;ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.
7ವಿಗ್ರಹಗಳಲ್ಲಿ ಹಿಗ್ಗುವವರೂ,ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು;
ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.
8ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿಚೀಯೋನ್ ಪಟ್ಟಣವು ಹರ್ಷಿಸಿತು;
ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.
9ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ;ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.
10 ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ.ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ,
ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
11ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು ,ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.
12ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ;ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
98ಯೆಹೋವರಾಜನ ರಕ್ಷಣೆಯನ್ನು ಕೊಂಡಾಡುವುದು
(ಕೀರ್ತ. 67)
1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ;ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ.
ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.
2ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ;ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.
3ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ,ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ.
ಭೂಲೋಕದ ಎಲ್ಲಾ ಕಡೆಯವರೂ,
ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.
4ಸಮಸ್ತ ಭೂನಿವಾಸಿಗಳೇ,ಯೆಹೋವನಿಗೆ ಜಯಘೋಷಮಾಡಿರಿ;
ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.
5ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ;ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ.
6ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ,ಯೆಹೋವರಾಜನಿಗೆ ಜಯಘೋಷಮಾಡಿರಿ.
7ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ,ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ.
8ನದಿಗಳು ಚಪ್ಪಾಳೆ ಹೊಡೆಯಲಿ;ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.
9ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ;ಆತನು ಲೋಕಕ್ಕೆ ನೀತಿಗನುಸಾರವಾಗಿಯೂ,
ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.
99ಯೆಹೋವರಾಜನ ಪವಿತ್ರತೆಯನ್ನು ಕೊಂಡಾಡುವುದು
(ಯೆಶಾ. 6)
1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;ಜನಾಂಗಗಳು ನಡುಗಲಿ.
ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ;
ಭೂಮಿಯು ಕಂಪಿಸಲಿ.
2ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು;ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.
3ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ;ಆತನು ಪರಿಶುದ್ಧನು.
4ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ ;ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ,
ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.
5ನಮ್ಮ ಯೆಹೋವ ದೇವರನ್ನು ಘನಪಡಿಸಿರಿ;ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ.
ಆತನು ಪರಿಶುದ್ಧನು.
6ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ,ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ,
ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.
7ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು;ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.
8ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ.ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ,
ಕ್ಷಮಿಸುವ ದೇವರಾಗಿದ್ದಿ.
9ನಮ್ಮ ಯೆಹೋವ ದೇವರನ್ನು ಘನಪಡಿಸಿರಿ;ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ.
ನಮ್ಮ ಯೆಹೋವ ದೇವರು ಪರಿಶುದ್ಧನು.
100ಲೋಕವೆಲ್ಲಾ ಇಸ್ರಾಯೇಲರ ದೇವರನ್ನು ಆರಾಧಿಸಬೇಕೆಂಬ ಬೋಧನೆ
ಕೃತಜ್ಞತಾಯಜ್ಞ ಕೀರ್ತನೆ.
(ಕೀರ್ತ. 95)
1ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.
2ಯೆಹೋವನನ್ನು ಸಂತೋಷದಿಂದ ಸೇವಿಸಿರಿ;ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.
3ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ.ನಮ್ಮನ್ನು ಉಂಟುಮಾಡಿದವನು ಆತನೇ;
ನಾವು ಆತನವರು, ಆತನ ಪ್ರಜೆಯೂ,
ಆತನು ಪಾಲಿಸುವ ಹಿಂಡೂ ಆಗಿದ್ದೇವೆ.
4ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ,ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ;
ಆತನ ಉಪಕಾರಗಳನ್ನು ಸ್ಮರಿಸಿರಿ;
ಆತನ ನಾಮವನ್ನು ಕೊಂಡಾಡಿರಿ.
5ಯೆಹೋವನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ,
ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
101ರಾಜಶ್ರೇಷ್ಠನ ಪ್ರತಿಜ್ಞೆ
ದಾವೀದನ ಕೀರ್ತನೆ.
(ಕೀರ್ತ. 15; 24)
1ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು;ಯೆಹೋವನೇ, ನಿನ್ನನ್ನು ಕೊಂಡಾಡುವೆನು.
2ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು;ನನಗೆ ಯಾವಾಗ ದರ್ಶನಕೊಡುವಿ?
ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.
3ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ;ದುರಾಚಾರವನ್ನು ಹಗೆಮಾಡುತ್ತೇನೆ,
ಅದರ ಗೊಡವೆಯೇ ನನಗೆ ಬೇಡ.
4ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ;ಕೆಟ್ಟತನವನ್ನು ಅರಿಯದಿರುವೆನು.
5ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು;ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.
6ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು;ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು,
ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.
7ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು;ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.
8ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ,ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.
102ದುಃಖಿತನಾದ ದೀನನ ಪ್ರಾರ್ಥನೆ
1ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು;ನನ್ನ ಕೂಗು ನಿನಗೆ ಮುಟ್ಟಲಿ.
2ನನ್ನ ಕಷ್ಟದಲ್ಲಿ ವಿಮುಖನಾಗಬೇಡ;ನನ್ನ ಮೊರೆಗೆ ಕಿವಿಗೊಡು;
ನಾನು ಕೂಗಿಕೊಳ್ಳುವ ದಿನದಲ್ಲಿ ಬೇಗನೆ ಸದುತ್ತರವನ್ನು ದಯಪಾಲಿಸು.
3ನನ್ನ ಜೀವಮಾನವು ಹೊಗೆಯಂತೆ ಮಾಯವಾಗುತ್ತದೆ;ನನ್ನ ಎಲುಬುಗಳು ಕೊಳ್ಳಿಯಂತೆ ಸುಟ್ಟುಹೋಗುತ್ತವೆ.
4ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ;ಊಟವನ್ನು ಮರೆತೆನು.
5ನಿಟ್ಟುಸಿರಿನಿಂದ ನನ್ನಲ್ಲಿ ಎಲುಬು, ತೊಗಲು ಮಾತ್ರ ಉಳಿದಿರುತ್ತವೆ.
6ಅಡವಿಯ ಬಕಪಕ್ಷಿಯಂತಿದ್ದೇನೆ;ಹಾಳೂರಿನ ಗೂಬೆಯಂತಿದ್ದೇನೆ.
7ನಿದ್ರೆಯಿಲ್ಲದವನಾಗಿ ಮನೆಮಾಳಿಗೆಯ ಮೇಲಿರುವ,ಒಂಟಿಯಾದ ಪಕ್ಷಿಯಂತಿದ್ದೇನೆ.
8ವೈರಿಗಳು ಹಗಲೆಲ್ಲಾ ನನ್ನನ್ನು ನಿಂದಿಸುತ್ತಾರೆ;ನನ್ನ ಮೇಲೆ ಕೋಪಾವೇಶವುಳ್ಳವರು ಯಾರನ್ನಾದರೂ ಶಪಿಸುವಾಗ,
ನನ್ನನ್ನು ದೃಷ್ಟಾಂತಮಾಡಿ ಶಪಿಸುತ್ತಾರೆ.
9ಬೂದಿಯೇ ನನಗೆ ಆಹಾರವಾಯಿತು;ನನ್ನ ಪಾನದಲ್ಲಿ ಕಣ್ಣೀರು ಮಿಶ್ರವಾಯಿತು.
10ಇದಕ್ಕೆಲ್ಲಾ ನಿನ್ನ ಕೋಪ, ರೌದ್ರಗಳೇ ಕಾರಣ,ನೀನು ನನ್ನನ್ನು ಎತ್ತಿ ಒಗೆದುಬಿಟ್ಟಿದ್ದಿಯಲ್ಲಾ!
11ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ;ನಾನು ಬಾಡಿಹೋದ ಹುಲ್ಲಿನಂತಿದ್ದೇನೆ.
12ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ;ನಿನ್ನ ನಾಮವು ತಲತಲಾಂತರಕ್ಕೂ ಸ್ಮರಿಸಲ್ಪಡುವುದು.
13ನೀನು ಎದ್ದು ಚೀಯೋನನ್ನು ಕರುಣಿಸುವಿ.ಅದಕ್ಕೆ ಕೃಪೆತೋರಿಸುವ ಸಮಯ ಇದೇ;
ನಿಯಮಿತ ಕಾಲವು ಬಂದಿದೆ.
14ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ,ಅದು ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ;
ಅದರ ಧೂಳಿಗೆ ಅವರು ಮರಗುತ್ತಾರೆ.
15ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ,
16ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರುಗಿ ಕಟ್ಟಿಸಿದನೆಂದೂ, 17ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ,ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.
18ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ,ಮುಂದೆ ಹುಟ್ಟುವ ಪ್ರಜೆಯು ಯೆಹೋವನನ್ನು ಕೊಂಡಾಡುತ್ತಾ,
19<<ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ;ಆತನು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾನೆ.
20ಸೆರೆಯವರ ಗೋಳಾಟವನ್ನು ಪರಿಗಣಿಸಿ, ಮರಣಪಾತ್ರರನ್ನು ಬಿಡಿಸಿ, 21ಅವರು ಚೀಯೋನಿನಲ್ಲಿ ಯೆಹೋವನ ನಾಮವನ್ನು ವರ್ಣಿಸುವಂತೆಯೂ,ಯೆರೂಸಲೇಮಿನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ.
22ಜನಾಂಗಗಳೂ, ರಾಜ್ಯಗಳೂ ಕೂಡಿಬಂದುಇವರೊಡನೆ ಯೆಹೋವನನ್ನು ಸೇವಿಸುತ್ತವೆ>> ಎಂದು ಹೇಳುವುದು.
23ಆತನು ಯೌವನಪ್ರಾಯದಲ್ಲಿಯೇ ನನ್ನ ಬಲವನ್ನು ಕುಂದಿಸಿದ್ದಾನೆ;
24ನನ್ನ ಆಯುಷ್ಯವನ್ನು ಕಡಿಮೆ ಮಾಡಿಬಿಟ್ಟಿದ್ದಾನೆ.ಆದುದರಿಂದ, <<ನನ್ನ ದೇವರೇ, ಅರ್ಧಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ;
ನಿನ್ನ ವರ್ಷಗಳು ತಲತಲಾಂತರಕ್ಕೂ ಇರುತ್ತವೆ.
25ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ;ಗಗನಮಂಡಲವು ನಿನ್ನ ಕೈಕೆಲಸವಾಗಿದೆ.
26ಅವು ನಾಶವಾಗುವವು;ಆದರೆ ನೀನು ಶಾಶ್ವತವಾಗಿರುತ್ತಿ.
ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.
ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು.
27ನೀನಾದರೋ ಏಕರೀತಿಯಾಗಿರುತ್ತಿ;ನಿನ್ನ ವರ್ಷಗಳು ಮುಗಿದುಹೋಗುವುದಿಲ್ಲ.
28ನಿನ್ನ ಸೇವಕರ ಮಕ್ಕಳು ಬಾಳುವರು.ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು>> ಎಂದು ಮೊರೆಯಿಡುತ್ತೇನೆ.
103ದೇವರ ಕೃಪೆಯನ್ನು ಕೊಂಡಾಡುವುದು
ದಾವೀದನ ಕೀರ್ತನೆ.
1ನನ್ನ ಮನವೇ, ಯೆಹೋವನನ್ನು ಕೊಂಡಾಡು;ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.
2ನನ್ನ ಮನವೇ, ಯೆಹೋವನನ್ನು ಕೊಂಡಾಡು;ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.
3ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ,ಸಮಸ್ತ ರೋಗಗಳನ್ನು ವಾಸಿಮಾಡುವವನೂ,
4ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.
5ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ;ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ.
6ಯೆಹೋವನು ನೀತಿಯನ್ನು ಸಾಧಿಸುವವನಾಗಿ,ಕುಗ್ಗಿಹೋದವರೆಲ್ಲರ ನ್ಯಾಯವನ್ನು ಸ್ಥಾಪಿಸುತ್ತಾನೆ.
7ಆತನು ಮೋಶೆಗೆ ತನ್ನ ಮಾರ್ಗವನ್ನೂ,ಇಸ್ರಾಯೇಲರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.
8ಯೆಹೋವನು ಕನಿಕರವೂ, ದಯೆಯೂ,ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.
9ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ;ನಿತ್ಯವೂ ಕೋಪಿಸುವವನಲ್ಲ.
10ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ;ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ.
11ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ,ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.
12ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ,ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.
13ತಂದೆಯು ಮಕ್ಕಳನ್ನು ಕನಿಕರಿಸುವಂತೆ,ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.
14ನಾವು ರೂಪಗೊಂಡಿದ್ದನ್ನು ಆತನು ಬಲ್ಲನು;ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ.
15ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ;ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.
16ಗಾಳಿ ಬಡಿಯುತ್ತಲೇ ಅದು ಹೋಗುವುದು;ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ.
17ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ,ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.
18ಆತನ ನಿಬಂಧನೆಗಳನ್ನು ಕೈಕೊಂಡು,ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ
ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.
19ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ;ಆತನು ಸಮಸ್ತವನ್ನೂ ಆಳುತ್ತಾನೆ.
20ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ,
ಯೆಹೋವನನ್ನು ಕೊಂಡಾಡಿರಿ.
21ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ,ಯೆಹೋವನನ್ನು ಕೊಂಡಾಡಿರಿ.
22ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ,ಯೆಹೋವನನ್ನು ಕೊಂಡಾಡಿರಿ.
ನನ್ನ ಮನವೇ, ಯೆಹೋವನನ್ನು ಕೊಂಡಾಡು.
104ಯೆಹೋವನ ಸೃಷ್ಟಿಯ ಮಹತ್ವ
(ಆದಿ. 1)
1ನನ್ನ ಮನವೇ, ಯೆಹೋವನನ್ನು ಕೊಂಡಾಡು.ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು;
ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ.
2ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ;ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.
3ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು;ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ;
ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.
4 ಗಾಳಿಯನ್ನು ನಿನ್ನ ದೂತರನ್ನಾಗಿಯೂ,ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.
5ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ.
6ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ;ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು.
7ನೀನು ಗದರಿಸಲು ಅದು ಓಡಿಹೋಯಿತು;ನಿನ್ನ ಗರ್ಜನೆಗೆ ಹೆದರಿ ನೀನು ನೇಮಿಸಿದ ಸ್ಥಳಕ್ಕೆ ಹೋಗಲು,
8ಪರ್ವತಗಳು ಎದ್ದವು; ತಗ್ಗುಗಳು ಇಳಿದವು.
9ಜಲರಾಶಿಗಳು ಬಂದು ಪುನಃ ಭೂಮಿಯನ್ನು ಮುಚ್ಚಿಕೊಳ್ಳದ ಹಾಗೆ,ನೀನು ಮೇರೆಗಳನ್ನು ಗೊತ್ತುಮಾಡಿದಿ.
10ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ;ಅವು ಪರ್ವತಗಳ ನಡುವೆ ಹರಿದುಹೋಗುತ್ತವೆ.
11ಅವು ಅಡವಿಯ ಮೃಗಗಳಿಗೆ ನೀರುಕೊಡುತ್ತವೆ;ಕಾಡುಕತ್ತೆಗಳು ದಾಹ ತೀರಿಸಿಕೊಳ್ಳುತ್ತವೆ.
12ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ. 13ನೀನು ನಿನ್ನ ಮೇಲಂತಸ್ತುಗಳಿಂದ ಪರ್ವತಗಳಿಗೆ ನೀರು ಕೊಡುತ್ತೀ;ನಿನ್ನ ಕಾರ್ಯಫಲದಿಂದ ಭೂಮಿಯು ತೃಪ್ತಿಹೊಂದುತ್ತದೆ.
14ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ;ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ.
ಅವರು ಭೂವ್ಯವಸಾಯಮಾಡಿ ಆಹಾರವನ್ನು,
15ಹೃದಯಾನಂದಕರವಾದ ದ್ರಾಕ್ಷಾರಸವನ್ನು,ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು,
ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.
16ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆಬೇಕಾದಷ್ಟು ಜಲವಿರುತ್ತದೆ.
17ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ;ತುರಾಯಿ ಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.
18ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ,ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ.
19ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿರುವೆ;ಸೂರ್ಯನು ತನ್ನ ಅಸ್ತಮಾನ ಸಮಯವನ್ನು ಬಲ್ಲನು.
20ನೀನು ಕತ್ತಲೆಯನ್ನು ಬರಮಾಡಲು ರಾತ್ರಿಯಾಗುತ್ತದೆ.ಆಗ ಕಾಡಿನ ಮೃಗಗಳೆಲ್ಲಾ ಹೊರಬರುತ್ತವೆ.
21ಪ್ರಾಯದ ಸಿಂಹಗಳು ಬೇಟೆಗಾಗಿ ಗರ್ಜಿಸುತ್ತವೆ;ದೇವರಿಂದ ಆಹಾರವನ್ನು ಕೇಳಿಕೊಳ್ಳುತ್ತವೆ.
22ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ. 23ಮನುಷ್ಯನು ತನ್ನ ಕೆಲಸಕ್ಕೆ ಹೊರಟು ಹೋಗುತ್ತಾನೆ;ಸಾಯಂಕಾಲದವರೆಗೆ ದುಡಿಯುತ್ತಾನೆ.
24ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ.ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ;
ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.
25ಇಗೋ, ಬಹುವಿಶಾಲವಾದ ಸಮುದ್ರವು!ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ, ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ.
26ಅದರಲ್ಲಿ ಹಡಗುಗಳು ಸಂಚರಿಸುತ್ತವೆನೀನು ಉಂಟುಮಾಡಿದ ಲಿವ್ಯಾತಾನವು ಅದರಲ್ಲಿ ಆಡುತ್ತದೆ.
27ಇವುಗಳು ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ.
28ನೀನು ಕೊಡಲು ಅವು ತೆಗೆದುಕೊಳ್ಳುತ್ತವೆ;ನೀನು ಕೈತೆರೆಯಲು ಅವು ಒಳ್ಳೇಯದನ್ನು ಹೊಂದಿ ತೃಪ್ತಿಗೊಳ್ಳುತ್ತವೆ.
29ನೀನು ವಿಮುಖನಾಗಲು ತಲ್ಲಣಿಸುತ್ತವೆ;ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.
30ನೀನು ಜೀವಶ್ವಾಸವನ್ನು ಊದಲು ಅವು ಹೊಸದಾಗಿ ಹುಟ್ಟುತ್ತವೆ.ನೀನು ಭೂಮಿಯನ್ನು ನೂತನಪಡಿಸುತ್ತಿರುತ್ತಿ.
31ಯೆಹೋವನ ಮಹಿಮೆಯು ಸದಾಕಾಲವೂ ಇರಲಿ;ಯೆಹೋವನಿಗೆ ಆತನ ಸೃಷ್ಟಿಗಳಿಂದ ಸಂತೋಷವಾಗಲಿ.
32ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ;ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.
33ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು;ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು.
34ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ;ನಾನಾದರೋ ಯೆಹೋವನಲ್ಲಿ ಆನಂದಿಸುವೆನು.
35ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ;ದುಷ್ಟರು ನಿರ್ಮೂಲವಾಗಲಿ.
ನನ್ನ ಮನವೇ, ಯೆಹೋವನನ್ನು ಕೊಂಡಾಡು;
ಯೆಹೋವನಿಗೆ ಸ್ತೋತ್ರ.
105ವಾಗ್ದಾನವನ್ನು ನೆರವೇರಿಸಿದ ಯೆಹೋವನಿಗೆ ಸ್ತೋತ್ರ
(ಕೀರ್ತ. 78; 106)
1ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ;ಆತನ ನಾಮದ ಮಹತ್ವವನ್ನು ವರ್ಣಿಸಿರಿ;
ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.
2ಆತನನ್ನು ಕೀರ್ತಿಸಿರಿ, ಭಜಿಸಿರಿ;ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.
3ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ;ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.
4ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ;ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
5ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ,ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು,
6ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ,ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ.
7ಯೆಹೋವನೆಂಬಾತನೇ ನಮ್ಮ ದೇವರು;ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.
8ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ,ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.
9ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು;ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.
10ಅದು ರಾಜಶಾಸನದಂತೆ ಇರುವುದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು.
11ಅವರಲ್ಲಿ ಸ್ವಲ್ಪ ಜನರುಕಾನಾನ್ ದೇಶದಲ್ಲಿ ಪ್ರವಾಸಿಗಳಾಗಿ ಇರುವಾಗಲೇ,
12ಆತನು, <<ನಿಮಗೆ ಈ ದೇಶವನ್ನು ಕೊಡುವೆನು;ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು>> ಎಂದು ಹೇಳಿದನು.
13ಅವರು ದೇಶದಿಂದ ದೇಶಕ್ಕೂ, ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಾಗ, 14ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ.ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ,
15<<ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು,ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು>> ಎಂದು ಹೇಳಿದನು.
16ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು.
17ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು;ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು.
18ಅವನ ಕಾಲುಗಳು ಬೇಡಿಗಳಿಂದ ಕಟ್ಟಲ್ಪಟ್ಟವು;ಕಬ್ಬಿಣದ ಕೊರಳಪಟ್ಟಿಯಿಂದ ಅವನು ಬಂಧಿತನಾದನು.
19ಅವನು ತನ್ನ ಮಾತು ನೆರವೇರುವ ತನಕಯೆಹೋವನ ವಾಕ್ಯದಿಂದ ಶೋಧಿತನಾದನು.
20ಅರಸನು ಅಪ್ಪಣೆಮಾಡಿ ಅವನನ್ನು ತಪ್ಪಿಸಿದನು;ಜನಾಧಿಪತಿಯು ಅವನನ್ನು ಬಿಡಿಸಿದನು.
21ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ,ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು.
22ತನ್ನ ಪ್ರಧಾನರನ್ನು ಇಷ್ಟಾನುಸಾರವಾಗಿ ಬಂಧಿಸುವುದಕ್ಕೂ,ತನ್ನ ಮಂತ್ರಿಗಳಿಗೆ ಬುದ್ಧಿಕಲಿಸುವುದಕ್ಕೂ ಅವನಿಗೆ ಅಧಿಕಾರಕೊಟ್ಟನು.
23ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು;ಯಾಕೋಬನು ಹಾಮನ ದೇಶದಲ್ಲಿ ಪ್ರವಾಸಿಯಾದನು.
24ದೇವರು ತನ್ನ ಜನರನ್ನು ಬಹಳವಾಗಿ ವೃದ್ಧಿಮಾಡಿ,ಅವರು ಶತ್ರುಗಳಿಗಿಂತ ಬಲಿಷ್ಠರಾಗುವಂತೆ ಮಾಡಿದನು.
25ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ,ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು.
26ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ,ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು.
27ಅವರು ಹಾಮನ ದೇಶದವರ ಮಧ್ಯದಲ್ಲಿ,ಆತನು ಆಜ್ಞಾಪಿಸಿದ ವಿವಿಧ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದರು.
28ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು.ಐಗುಪ್ತ್ಯರು ಆತನ ಆಜ್ಞೆಗಳನ್ನು ಅನುಸರಿಸಲಿಲ್ಲ.
29ಆತನು ಐಗುಪ್ತ್ಯರ ನೀರನ್ನು ರಕ್ತಮಾಡಿ, ಮೀನುಗಳನ್ನು ಸಾಯಿಸಿದನು.
30ಅವರ ದೇಶದಲ್ಲೆಲ್ಲಾ ಕಪ್ಪೆಗಳು ತುಂಬಿಕೊಂಡವು;ಅರಮನೆಯಲ್ಲಿಯೂ ವ್ಯಾಪಿಸಿಕೊಂಡವು.
31ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತ್ಯಗಳಲ್ಲಿ,ವಿಷದ ಹುಳಗಳೂ, ಹೇನುಗಳೂ ಉಂಟಾದವು.
32ಆತನು ಅವರ ದೇಶದಲ್ಲಿ ಕಲ್ಮಳೆಯನ್ನು, ಅಗ್ನಿಜ್ವಾಲೆಯನ್ನು ಬರಮಾಡಿ,
33ಅವರ ದ್ರಾಕ್ಷಾಲತೆಗಳನ್ನು, ಅಂಜೂರದ ಗಿಡಗಳನ್ನು ನಾಶಮಾಡಿ,ಅವರ ಪ್ರಾಂತ್ಯಗಳಲ್ಲಿದ್ದ ಮರಗಳನ್ನು ಮುರಿದುಬಿಟ್ಟನು.
34ಆತನು ಆಜ್ಞಾಪಿಸಲು ಮಿಡತೆಗಳೂ,ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು,
35ಅವರ ದೇಶದಲ್ಲಿದ್ದ ಎಲ್ಲಾ ಪೈರುಗಳನ್ನು,ಭೂಮಿಯ ಬೆಳೆಗಳನ್ನು ತಿಂದುಬಿಟ್ಟವು.
36ಅವನು ಆ ದೇಶದವರ ವೀರ್ಯಕ್ಕೆ ಪ್ರಥಮಫಲವಾಗಿದ್ದ,ಚೊಚ್ಚಲ ಮಕ್ಕಳನ್ನು ಸಂಹರಿಸಿದನು.
37ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು;ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ.
38ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ,ಅವರು ಹೊರಟು ಹೋದದ್ದಕ್ಕೆ ಸಂತೋಷಿಸಿದರು.
39ಅವರಿಗೆ ಹಗಲಲ್ಲಿ ನೆರಳಿಗೋಸ್ಕರ ಮೋಡವನ್ನು,ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನು ಮೇಲೆ ಹರಡಿದನು.
40ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು;ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು.
41ಆತನು ಬಂಡೆಯನ್ನು ಸೀಳಲು ನೀರು ಚಿಮ್ಮಿ ಬಂದು,ಅರಣ್ಯದಲ್ಲಿ ನದಿಯಾಗಿ ಹರಿಯಿತು.
42ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ,ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು
43ತನ್ನ ಪ್ರಜೆಯು ಉಲ್ಲಾಸದಿಂದಲೂ,ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.
44ಆತನು ಅವರಿಗೆ ಪರಜನಾಂಗಗಳ ದೇಶವನ್ನು ಕೊಟ್ಟನು;ಅನ್ಯಜನಾಂಗಗಳ ಕಷ್ಟಾರ್ಜಿತವು ಅವರ ಕೈ ಸೇರಿತು.
45ಅವರು ತನ್ನ ವಿಧಿಗಳನ್ನು ಕೈಕೊಂಡು,ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು.
ಯೆಹೋವನಿಗೆ ಸ್ತೋತ್ರ!
106ಯೆಹೋವನ ಕ್ಷಮಾಯಾಚನೆ
(ಕೀರ್ತ. 78; 105)
1ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ.ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
2ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು?ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು?
3ಯಾವಾಗಲೂ ನ್ಯಾಯವನ್ನು ಕಾಪಾಡುವವರೂ,ನೀತಿಯನ್ನು ಪಾಲಿಸುವವರೂ ಧನ್ಯರು.
4ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು,ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು.
ನನ್ನನ್ನು ರಕ್ಷಿಸಲಿಕ್ಕೆ ಬಾ,
5ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ,ನಾನೂ ಅವರೊಂದಿಗೆ ಸಂತೋಷಿಸುವೆನು;
ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.
6ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು;ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.
7ನಮ್ಮ ಪೂರ್ವಿಕರು ಐಗುಪ್ತದಲ್ಲಿ ನಿನ್ನ ಅದ್ಭುತಕ್ರಿಯೆಗಳನ್ನು ಲಕ್ಷಿಸಲಿಲ್ಲ;ನಿನ್ನ ಕೃಪಾತಿಶಯವನ್ನು ಸ್ಮರಿಸಲಿಲ್ಲ.
ಅವರು ಕೆಂಪು ಸಮುದ್ರದ ಬಳಿಯಲ್ಲಿ ನಿನಗೆ ತಿರುಗಿಬಿದ್ದರು.
8ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ,ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.
9ಆತನು ಗದರಿಸಲು ಕೆಂಪು ಸಮುದ್ರವು ಒಣಗಿಹೋಯಿತು;ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.
10ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು;ವೈರಿಯ ಹಸ್ತದಿಂದ ಬಿಡಿಸಿದನು.
11ಜಲರಾಶಿಯು ಅವರ ವಿರೋಧಿಗಳನ್ನು ಮುಚ್ಚಿಬಿಟ್ಟಿತು;ಒಬ್ಬನೂ ಉಳಿಯಲಿಲ್ಲ.
12ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು. 13ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು,ಆತನ ನಡೆಸುವಿಕೆಗೆ ಕಾದಿರದೆ,
14ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ,ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.
15ಆತನು ಅವರ ಆಶೆಯನ್ನು ಪೂರೈಸಿದರೂ,ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು.
16ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ,ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು,
17ಭೂಮಿಯು ಬಾಯ್ದೆರೆದು ದಾತಾನನನ್ನು ನುಂಗಿಬಿಟ್ಟಿತು;ಅಬಿರಾಮನ ಕಡೆಯವರನ್ನು ಮುಚ್ಚಿಬಿಟ್ಟಿತು.
18ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು;ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು.
19ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ,ಅದಕ್ಕೆ ಅಡ್ಡಬಿದ್ದರು.
20ಹೀಗೆ ಅವರು ತಮ್ಮ ದಿವ್ಯಮಹಿಮೆಯ ದೇವರನ್ನು ಬಿಟ್ಟು,ಹುಲ್ಲು ತಿನ್ನುವ ಎತ್ತಿನ ಮೂರ್ತಿಯನ್ನು ಹಿಡಿದುಕೊಂಡರು.
21ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ, 22ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ,ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು.
23ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು,ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ,
ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.
24ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು,ಆತನ ಮಾತನ್ನು ನಂಬಲಿಲ್ಲ.
25ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ,ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.
26ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ,
27ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ,ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.
28ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ,ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.
29ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು;ಅವರಲ್ಲಿ ವ್ಯಾಧಿಯುಂಟಾಯಿತು.
30ಫೀನೆಹಾಸನು ಎದ್ದು ಅವರನ್ನು ದಂಡಿಸಲು,ಆ ವ್ಯಾಧಿಯು ನಿಂತುಹೋಯಿತು.
31ಅವನು ಮಾಡಿದ್ದು ತಲಾತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು. 32ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು.ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.
33ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ,ಮೋಶೆ ದುಡುಕಿ ಮಾತನಾಡಿದನು.
34ಅನ್ಯ ಜನಾಂಗದವರನ್ನು ಸಂಹರಿಸಬೇಕೆಂಬ,ಯೆಹೋವನ ಆಜ್ಞೆಗೆ ಅವಿಧೇಯರಾಗಿ,
35ಅವರೊಡನೆ ಕೂಡಿಕೊಂಡು, ಅವರ ದುರಾಚಾರಗಳನ್ನು ಕಲಿತುಕೊಂಡರು.
36ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು. 37ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು.
38ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ,ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು;
ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.
39ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು.ದುರಾಚಾರಗಳಿಂದ ದೇವದ್ರೋಹಿಗಳಾದರು.
40ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು;ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ,
41ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು.ವೈರಿಗಳು ಅವರ ಮೇಲೆ ಅಧಿಕಾರ ನಡೆಸಿದರು;
42ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು.
43ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ,ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು;
ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು.
44ಆದರೆ ಆತನು ಕಷ್ಟದಲ್ಲಿದ್ದ,ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.
45ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು,ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.
46ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.
47ಯೆಹೋವನೇ, ನಮ್ಮ ದೇವರೇ, ರಕ್ಷಿಸು;ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು.
ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು;
ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.
48ಇಸ್ರಾಯೇಲ್ ದೇವರಾದ ಯೆಹೋವನಿಗೆ,ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ;
ಸರ್ವಜನರೂ <<ಆಮೆನ್>> ಎನ್ನಲಿ.
ಯೆಹೋವನಿಗೆ ಸ್ತೋತ್ರ!
107ಪಂಚಮ ಭಾಗ (107-150)
ವಿಮುಕ್ತರ ಕೊಂಡಾಟ
1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ;ಆತನು ಒಳ್ಳೆಯವನು.
ಆತನ ಕೃಪೆಯು ಶಾಶ್ವತವಾಗಿರುವುದು.
2ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ,
3ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣಗಳಲ್ಲಿಯೂ,ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿಸಿದವರೆಲ್ಲರೂ ಸ್ತುತಿಮಾಡಲಿ.
4ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ,ದಾರಿತಪ್ಪಿ ಅಲೆಯುವವರಾಗಿ,
ಜನವಿರುವ ಊರನ್ನು ಕಾಣದೆ,
5ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.
6ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು,ಆತನು ಅವರನ್ನು ಕಷ್ಟದಿಂದ ಬಿಡಿಸಿದನು.
7ಜನವಿರುವ ಊರನ್ನು ಸೇರುವಂತೆ,ಅವರನ್ನು ಸರಿಯಾದ ದಾರಿಯಲ್ಲಿ ನಡೆಸಿದನು.
8ಅವರು ಯೆಹೋವನ ಕೃಪೆಗೋಸ್ಕರವೂ,ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ,
ಆತನನ್ನು ಕೊಂಡಾಡಲಿ.
9ಆತನು ಬಾಯಾರಿದವರ ಆಶೆಯನ್ನು ಪೂರೈಸಿ,ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.
10ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ,ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು.
11ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು,ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ,
12ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು;ನಿರಾಶ್ರಯರಾಗಿ ಬಿದ್ದುಹೋದರು.
13ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು,ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.
14ಆತನು ಅವರ ಬಂಧನಗಳನ್ನು ತೆಗೆದುಹಾಕಿ,ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.
15ಅವರು ಯೆಹೋವನ ಕೃಪೆಗೋಸ್ಕರವೂ,ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ,
ಆತನನ್ನು ಕೊಂಡಾಡಲಿ.
16ಆತನು ತಾಮ್ರದ ಕದಗಳನ್ನು ಒಡೆದು,ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ.
17ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು.
18ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.
19ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು,ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.
20ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ,ಅವರನ್ನು ಗುಣಪಡಿಸಿದನು;
ಸಮಾಧಿಗೆ ಸೇರದಂತೆ ಮಾಡಿದನು.
21ಅವರು ಯೆಹೋವನ ಕೃಪೆಗೋಸ್ಕರವೂ,ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ,
ಆತನನ್ನು ಕೊಂಡಾಡಲಿ.
22ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ,ಉತ್ಸಾಹಧ್ವನಿಮಾಡುತ್ತಾ
ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.
23ಹಡಗು ಹತ್ತಿ ಸಮುದ್ರ ಪ್ರಯಾಣ ಮಾಡುತ್ತಾ,ಮಹಾಜಲರಾಶಿಯಲ್ಲಿ ತಮ್ಮ ಉದ್ಯೋಗವನ್ನು ನಡೆಸುವವರು,
24ಯೆಹೋವನ ಮಹತ್ಕಾರ್ಯಗಳನ್ನೂ,ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.
25ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ,ಅದರಲ್ಲಿ ತೆರೆಗಳನ್ನು ಎಬ್ಬಿಸಿತು.
26ಜನರು ಆಕಾಶಕ್ಕೆ ಏರುತ್ತಲೂ,ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು.
27ಅವರು ದಿಕ್ಕುತೋರದವರಾಗಿ ಸುತ್ತುತ್ತಾ,ಕುಡುಕರಂತೆ ಹೊಯ್ದಾಡುತ್ತಿದ್ದರು.
28ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು,ಆತನು ಅವರನ್ನು ಕಷ್ಟದಿಂದ ಹೊರತಂದನು.
29ಆತನು ಬಿರುಗಾಳಿಯನ್ನು ಶಾಂತಪಡಿಸಿದನು;ತೆರೆಗಳು ನಿಂತವು.
30ಸಮುದ್ರವು ಶಾಂತವಾದುದರಿಂದ,ಹಡಗಿನವರು ಸಂತೋಷಪಟ್ಟರು,
ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು.
31ಅವರು ಯೆಹೋವನ ಕೃಪೆಗೋಸ್ಕರವೂಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ
ಆತನನ್ನು ಕೊಂಡಾಡಲಿ.
32ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ;ಹಿರಿಯರ ಸಮೂಹದಲ್ಲಿ ಕೊಂಡಾಡಲಿ.
33ಆತನು ನಿವಾಸಿಗಳ ದುಷ್ಟತನಕ್ಕಾಗಿನದಿಗಳನ್ನು ಅರಣ್ಯವಾಗುವಂತೆಯೂ,
34ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ,ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.
35ಅರಣ್ಯವನ್ನು ಕೆರೆಯಾಗಿಯೂ,ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,
36ಅಲ್ಲಿ ಹಸಿದವರನ್ನು ನೆಲೆಗೊಳಿಸಿದನು;ಅವರು ನೆಲೆಯಾಗಿ ವಾಸಿಸಲು ಪಟ್ಟಣವನ್ನು ಕಟ್ಟಿಕೊಂಡು,
37ಹೊಲಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಟ್ಟು,ಆದಾಯವನ್ನು ಕೂಡಿಸಿಕೊಂಡರು.
38ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು.ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.
39ಅವರು ಕೇಡು ತೊಂದರೆಗಳಿಂದಲೂ,ಸಂಕಟದಿಂದಲೂ ಕುಗ್ಗಿಹೋಗಿ ಸ್ವಲ್ಪ ಜನರಾದರು.
40ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ,ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.
41ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ,ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು.
42ಯಥಾರ್ಥರು ಇದನ್ನು ನೋಡಿ ಹಿಗ್ಗುವರು;ಕೆಡುಕುಬಾಯಿ ಮುಚ್ಚಿಹೋಗುವುದು.
43ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ,ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.
108ಜಯದ ವಾಗ್ದಾನ ನೆರವೇರಬೇಕೆಂಬ ಪ್ರಾರ್ಥನೆ
ದಾವೀದನ ಕೀರ್ತನೆ.
1ದೇವರೇ, ನನ್ನ ಹೃದಯವು ಸ್ಥಿರವಾಗಿದೆ;ನಾನು ನುಡಿಸುತ್ತಾ ಹಾಡುವೆನು; ನನ್ನ ಆತ್ಮವೇ, ಎಚ್ಚೆತ್ತುಕೋ!
2ಸ್ವರಮಂಡಲವೇ, ಕಿನ್ನರಿಯೇ, ಎಚ್ಚರಗೊಳ್ಳಿರಿ.ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
3ಯೆಹೋವನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು;ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
4ಏಕೆಂದರೆ ನಿನ್ನ ಕೃಪೆಯು ಆಕಾಶಕ್ಕಿಂತಲೂ ದೊಡ್ಡದಾಗಿದೆ,ನಿನ್ನ ಸತ್ಯತೆಯು ಮುಗಿಲನ್ನು ನಿಲುಕುತ್ತದೆ.
5ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ;ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
6ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು,ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
7ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ.ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು.
ಸುಖೋತ್ ಬಯಲನ್ನು ಅಳತೆಮಾಡಿ ಕೊಡುವೆನು.
8ಗಿಲ್ಯಾದ್ ಸೀಮೆಯೂ, ಮನಸ್ಸೆಯ ದೇಶವೂ ನನ್ನವು.ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ.
ನನ್ನ ರಾಜದಂಡವು ಯೆಹೂದ ಕುಲವೇ.
9ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆ;ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ.
ಫಿಲಿಷ್ಟಿಯದ ವಿಷಯವಾಗಿ ಜಯಘೋಷ ಮಾಡುವೆನು.
10ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು?ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
11ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ!ದೇವರೇ, ನಮ್ಮನ್ನು ಕೈಬಿಟ್ಟಿಯಾ?
12ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು.ಮನುಷ್ಯರ ಸಹಾಯವು ವ್ಯರ್ಥ.
13ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು;ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.
109ರಕ್ಷಣೆಗಾಗಿ ಭಕ್ತನ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
(ಯಾಜ. 26; ಧರ್ಮೋ. 28; ಕೀರ್ತ. 35; 69; ಮತ್ತಾ. 5:38-44)
1ನಾನು ಸ್ತುತಿಸುವ ದೇವರೇ, ಸುಮ್ಮನಿರಬೇಡ.
2ದುಷ್ಟರು, ವಂಚಕರು ನನಗೆ ವಿರುದ್ಧವಾಗಿ ಬಾಯ್ದೆರೆದಿದ್ದಾರೆ.ಅವರು ಸುಳ್ಳು ನಾಲಿಗೆಯಿಂದ ನನ್ನೊಡನೆ ಮಾತನಾಡುತ್ತಿದ್ದಾರೆ.
3ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು,ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.
4ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ;ನಾನಾದರೋ ನಿನಗೆ ಮೊರೆಯಿಡುತ್ತೇನೆ.
5ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ;ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.
6ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು;ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.
7ನ್ಯಾಯವಿಚಾರಣೆಯಲ್ಲಿ ಅವನು ಅಪರಾಧಿ ಎಂದು ತೀರ್ಪುಹೊಂದಲಿ;ಅವನ ಪ್ರಾರ್ಥನೆಯೂ ಪಾಪವೆಂದು ಎಣಿಸಲ್ಪಡಲಿ.
8ಅವನ ಜೀವಿತದ ದಿನಗಳು ಸ್ವಲ್ಪವಾಗಿರಲಿ;ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ.
9ಅವನ ಮಕ್ಕಳು ಅನಾಥರೂ ಮತ್ತು ಹೆಂಡತಿ ವಿಧವೆಯೂ ಆಗಲಿ.
10ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು,ದಿಕ್ಕಿಲ್ಲದವರಂತೆ ಅಲೆಯುತ್ತಾ ಭಿಕ್ಷೆಬೇಡಲಿ.
11ಸಾಲಕೊಟ್ಟವನು ಅವನ ಆಸ್ತಿಯನ್ನೆಲ್ಲಾ ಕಸಿದುಕೊಳ್ಳಲಿ;ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ.
12ಅವನಿಗೆ ಯಾರೂ ಕೃಪೆತೋರಿಸದಿರಲಿ,ದಿಕ್ಕಿಲ್ಲದ ಅವನ ಮಕ್ಕಳಿಗೆ ಯಾರೂ ದಯೆತೋರದಿರಲಿ,
13ಅವನ ಸಂತತಿಯು ನಿರ್ಮೂಲವಾಗಲಿ;ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.
14ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ;ಅವನ ತಾಯಿಯ ಪಾಪವು ಅಳಿದುಹೋಗದಿರಲಿ.
15ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ.ಆತನು ಅವರ ಹೆಸರನ್ನು ಭೂಮಿಯಿಂದ ತೆಗೆದುಹಾಕಲಿ.
16ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು,ಬಡವನನ್ನು, ದೀನನನ್ನು, ಮನಗುಂದಿದವನನ್ನು ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.
17ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ!ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ!
18ಅವನು ಶಾಪವನ್ನೇ ವಸ್ತ್ರವನ್ನಾಗಿ ಹೊದ್ದುಕೊಳ್ಳಲಿ,ಅದು ನೀರಿನಂತೆ ಅವನ ಅಂತರಂಗದಲ್ಲಿಯೂ,
ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಲಿ.
19ಶಾಪವೇ ಅವನ ಹೊದಿಕೆಯಂತೆಯೂ,ನಿತ್ಯವಾದ ನಡುಕಟ್ಟಿನಂತೆಯೂ ಆಗಲಿ.
20ನನ್ನನ್ನು ಎದುರಿಸಿ ಕೀಳುಮಾತನಾಡುವವರಿಗೆಯೆಹೋವನಿಂದ ಬರುವ ಪ್ರತಿಫಲವು ಇದೇ ಆಗಿರಲಿ.
21ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ;ನಿನ್ನ ಹೆಸರಿನ ನಿಮಿತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು.
22ನಾನು ಬಡವನೂ, ದೀನನೂ ಆಗಿದ್ದೇನಲ್ಲಾ!ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ.
23ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ;ಗಾಳಿಯು ಬಡಿದುಕೊಂಡು ಹೋಗುವ ಮಿಡತೆಯಂತಿದ್ದೇನೆ.
24ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು;ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು.
25ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ;ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ.
26ಯೆಹೋವನೇ, ನನ್ನ ದೇವರೇ, ಸಹಾಯಮಾಡು;ನಿನ್ನ ಕೃಪೆಗೆ ತಕ್ಕಂತೆ ರಕ್ಷಿಸು.
27ಆಗ ಅವರು ಇದು ನಿನ್ನ ಕೈಕೆಲಸವೆಂದೂ,ಯೆಹೋವನಾದ ನೀನೇ ಇದನ್ನು ಮಾಡಿದೆ ಎಂದು ತಿಳಿದುಕೊಳ್ಳುವರು.
28ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ.ಅವರು ಎದ್ದು ಅಪಮಾನ ಹೊಂದುವರು.
ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.
29ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ;ನಾಚಿಕೆಯೇ ಅವರ ಹೊದಿಕೆಯಾಗಲಿ.
30ಯೆಹೋವನನ್ನು ಬಹಳವಾಗಿ ಕೊಂಡಾಡುವೆನು;ಜನಸಮೂಹದ ಮಧ್ಯದಲ್ಲಿ ಆತನನ್ನು ಕೀರ್ತಿಸುವೆನು.
31ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು,ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.
110ಯೆಹೋವನಿಂದ ಆರಿಸಲ್ಪಟ್ಟ ಚೀಯೋನಿನ ಅರಸ
ದಾವೀದನ ಕೀರ್ತನೆ.
(ಕೀರ್ತ. 2; 21)
1ಯೆಹೋವನು ನನ್ನ ಒಡೆಯನಿಗೆ,<<ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ,
ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು>> ಎಂದು ನುಡಿದನು.
2ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನುಚೀಯೋನಿನ ಹೊರಗೂ ಹಬ್ಬಿಸುವನು;
ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು.
3ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ,ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು.
ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು,
ಉದಯಕಾಲದ ಇಬ್ಬನಿಯಂತಿರುವರು.
4<<ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ>> ಎಂದುಯೆಹೋವನು ಆಣೆಯಿಟ್ಟು ನುಡಿದಿದ್ದಾನೆ;
ಪಶ್ಚಾತ್ತಾಪಡುವುದಿಲ್ಲ.
5ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿರಾಜರನ್ನು ಖಂಡಿಸುವನು.
6ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ,ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ,
ಹೆಣಗಳಿಂದ ಅದನ್ನು ತುಂಬಿಸುವನು.
7ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು.
111ದೇವಸ್ತುತಿ
(ಕೀರ್ತ. 112)
1ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು;ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ,
ಮನಃಪೂರ್ವಕವಾಗಿ ಕೀರ್ತಿಸುವೆನು.
2ಯೆಹೋವನ ಕೃತ್ಯಗಳು ಮಹತ್ತಾದವುಗಳು;ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.
3ಆತನ ಕಾರ್ಯವು ಘನ, ಮಾನಗಳುಳ್ಳದ್ದು;ಆತನ ನೀತಿಯು ಸದಾಕಾಲವೂ ಇರುವುದು.
4ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ.ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.
5ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ;ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ
6ಆತನು ಅನ್ಯಜನಗಳ ಸ್ವತ್ತನ್ನು ತನ್ನ ಪ್ರಜೆಗೆ ಕೊಡುವುದರ ಮೂಲಕಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ.
7ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ;ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.
8ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು.ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ.
9ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ;ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ;
ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ.
10ಯೆಹೋವನ ಭಯವೇ ಜ್ಞಾನಕ್ಕೆ ಮೂಲ;ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು.
ಆತನ ಸ್ತುತಿಯು ನಿರಂತರವಾದದ್ದು.
112ಭಕ್ತರ ಧನ್ಯತೆ
(ಕೀರ್ತ. 111)
1ಯೆಹೋವನಿಗೆ ಸ್ತೋತ್ರ!ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ,
ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.
2ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು;ನೀತಿವಂತನ ವಂಶವು ಶುಭಹೊಂದುವುದು.
3ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು;ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.
4ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು;ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.
5ದಯಾಳುವಾಗಿ ಧನಸಹಾಯ ಮಾಡುವವನೂ,ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.
6ಅವನು ಎಂದಿಗೂ ಕದಲುವುದಿಲ್ಲ;ನೀತಿವಂತನನ್ನು ಯಾವಾಗಲೂ ಸ್ಮರಿಸುವರು.
7ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ;ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ,
ಅವನ ಮನಸ್ಸು ಸ್ಥಿರವಾಗಿರುವುದು.
8ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ.
9ಬಡವರಿಗೆ ಉದಾರವಾಗಿ ಕೊಡುತ್ತಾನೆ;ಅವನ ನೀತಿಯ ಫಲವು ಸದಾಕಾಲವೂ ಇರುವುದು.
ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.
10ದುಷ್ಟನು ನೋಡಿ ವ್ಯಥೆಪಡುವನು;ಅವನು ಹಲ್ಲುಕಡಿಯುತ್ತಾ ನಾಶವಾಗುವನು.
ದುಷ್ಟರ ನಿರೀಕ್ಷೆಯು ಭಂಗವಾಗುವುದು.
113ಯೆಹೋವನನ್ನು ಸ್ತುತಿಸುವುದು
1ಯೆಹೋವನಿಗೆ ಸ್ತೋತ್ರ!ಯೆಹೋವನ ಸೇವಕರೇ, ಸ್ತೋತ್ರಮಾಡಿರಿ;
ಯೆಹೋವನ ನಾಮವನ್ನು ಸ್ತುತಿಸಿರಿ.
2ಈಗಿನಿಂದ ಯುಗಯುಗಕ್ಕೂ,ಯೆಹೋವನ ನಾಮವು ಕೀರ್ತಿಸಲ್ಪಡಲಿ.
3ಯೆಹೋವನ ನಾಮವು ಪೂರ್ವದಿಂದ,ಪಶ್ಚಿಮದವರೆಗೂ ಸ್ತುತಿಹೊಂದಲಿ.
4ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು;ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ.
5ನಮ್ಮ ಯೆಹೋವ ದೇವರಿಗೆ ಸಮಾನರು ಯಾರು?ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,
6ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ. 7ಆತನು ದೀನರನ್ನು ಧೂಳಿನಿಂದ ಎಬ್ಬಿಸಿ,ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.
8ಪ್ರಭುಗಳ ಜೊತೆಯಲ್ಲಿ,ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.
9ಬಂಜೆಯು ಮಕ್ಕಳೊಂದಿಗೆ,ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ.
ಯೆಹೋವನಿಗೆ ಸ್ತೋತ್ರ!
114ಇಸ್ರಾಯೇಲರ ರಕ್ಷಕನ ಮಹತ್ವ
1ಇಸ್ರಾಯೇಲರು ಐಗುಪ್ತ ದೇಶವನ್ನೂ,ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ,
2ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ,ಇಸ್ರಾಯೇಲ್ ಆತನ ರಾಜ್ಯವೂ ಆಯಿತು.
3ಸಮುದ್ರವು ಕಂಡು ಓಡಿಹೋಯಿತು;ಯೊರ್ದನ್ ಹೊಳೆಯು ಹಿಂದಿರುಗಿತು.
4ಪರ್ವತಗಳು ಟಗರುಗಳಂತೆಯೂ,ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು.
5ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ?ಯೊರ್ದನೇ, ಏಕೆ ಹಿಂದಿರುಗುತ್ತೀ?
6ಪರ್ವತಗಳೇ, ನೀವು ಟಗರುಗಳಂತೆಯೂ,ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ?
7ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ,ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.
8ಆತನು ಬಂಡೆಯನ್ನು ಕೆರೆಯನ್ನಾಗಿಯೂ,ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ.
115ಯೆಹೋವನೊಬ್ಬನೇ ರಕ್ಷಕನು
ದಾವೀದನ ಕೀರ್ತನೆ.
1ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿನಿನ್ನ ಹೆಸರನ್ನೇ ಘನಪಡಿಸು.
2<<ಅವರ ದೇವರು ಎಲ್ಲಿದ್ದಾನೆ?>> ಎಂದು ಅನ್ಯರು ಏಕೆ ಹೇಳಬೇಕು? 3ನಮ್ಮ ದೇವರು ಪರಲೋಕದಲ್ಲಿದ್ದಾನೆ;ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ.
4ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ;ಅವು ಮನುಷ್ಯರ ಕೈಕೆಲಸವಷ್ಟೇ.
5ಅವು ಬಾಯಿದ್ದರೂ ಮಾತನಾಡುವುದಿಲ್ಲ;ಕಣ್ಣಿದ್ದರೂ ನೋಡುವುದಿಲ್ಲ.
6ಕಿವಿಯಿದ್ದರೂ ಕೇಳುವುದಿಲ್ಲ;ಮೂಗಿದ್ದರೂ ಮೂಸುವುದಿಲ್ಲ.
7ಕೈಯುಂಟು ಮುಟ್ಟುವುದಿಲ್ಲ;ಕಾಲುಂಟು ನಡೆಯುವುದಿಲ್ಲ;
ಅವುಗಳ ಗಂಟಲಲ್ಲಿ ಶಬ್ದವೇ ಇಲ್ಲ.
8ಅವುಗಳನ್ನು ಮಾಡುವವರೂ,ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.
9ಇಸ್ರಾಯೇಲರೇ, ಯೆಹೋವನಲ್ಲಿ ಭರವಸವಿಡಿರಿ.ಅವರ ಸಹಾಯಕನು, ಗುರಾಣಿಯು ಆತನೇ.
10ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ.ಅವರ ಸಹಾಯಕನು, ಗುರಾಣಿಯು ಆತನೇ.
11ಯೆಹೋವನ ಭಕ್ತರೇ, ಯೆಹೋವನಲ್ಲಿ ಭರವಸವಿಡಿರಿ.ಅವರ ಸಹಾಯಕನು, ಗುರಾಣಿಯು ಆತನೇ.
12ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ;ಸಣ್ಣವರು ಮೊದಲುಗೊಂಡು ದೊಡ್ಡವರ ವರೆಗೆ ಎಲ್ಲರನ್ನೂ ಆಶೀರ್ವದಿಸುವನು.
13ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು;ಆರೋನನ ಮನೆತನದವರನ್ನು ಆಶೀರ್ವದಿಸುವನು.
ತನ್ನ ಭಕ್ತರನ್ನು ಆಶೀರ್ವದಿಸುವನು.
14ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ; 15ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ.ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.
16ಪರಲೋಕವು ಯೆಹೋವನದು;ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ.
17ಸತ್ತವರು ಯೆಹೋವನನ್ನು ಸ್ತುತಿಸುವುದಿಲ್ಲ;ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವುದಿಲ್ಲ.
18ನಾವೋ ಇಂದಿನಿಂದ ಸದಾಕಾಲವೂಯೆಹೋವನನ್ನು ಕೊಂಡಾಡುವೆವು.
ಯೆಹೋವನಿಗೆ ಸ್ತೋತ್ರ!
116ಕೃತಜ್ಞತಾಯಜ್ಞ ಕೀರ್ತನೆ
(ಯೆಶಾ. 38)
1ಯೆಹೋವನನ್ನು ಪ್ರೀತಿಸುತ್ತೇನೆ;ಆತನು ನನ್ನ ಮೊರೆಯನ್ನು ಕೇಳುವನು.
2ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ;ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು.
3ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು;ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು.
ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು.
4ಆಗ ಯೆಹೋವನ ಹೆಸರನ್ನು ಹೇಳಿ,<<ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು>> ಎಂದು ಪ್ರಾರ್ಥಿಸಿದೆನು.
5ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ;ನಮ್ಮ ದೇವರು ಕನಿಕರವುಳ್ಳವನು.
6ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು;ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.
7ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು.ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.
8ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು, 9ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ,ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.
10<<ನಾನು ಬಹಳವಾಗಿ ಕುಗ್ಗಿಹೋದೆ>> ಎಂದು ಹೇಳಿದಾಗಲೂ,
11<<ಮನುಷ್ಯರೆಲ್ಲಾ ಸುಳ್ಳುಗಾರರು>> ಎಂದು ಭ್ರಾಂತಿಯಿಂದ ಹೇಳಿದಾಗಲೂ,ಭರವಸವುಳ್ಳವನಾಗಿಯೇ ಇದ್ದೆನು.
12ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?
13ರಕ್ಷಣಾಪಾತ್ರೆಯನ್ನು ತೆಗೆದುಕೊಂಡು,ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
14ಯೆಹೋವನಿಗೆ ಹೊತ್ತ ಹರಕೆಗಳನ್ನು,ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.
15ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ. 16ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು;ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ.
ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.
17ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು;ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
18ಯೆರೂಸಲೇಮೇ, ನಿನ್ನ ಮಧ್ಯದಲ್ಲಿ,ಯೆಹೋವನ ಮಂದಿರದ ಅಂಗಳಗಳಲ್ಲಿ,
19ಆತನಿಗೆ ಹೊತ್ತ ಹರಕೆಗಳನ್ನು,ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.
ಯೆಹೋವನಿಗೆ ಸ್ತೋತ್ರ!
117ಭೂಲೋಕವೆಲ್ಲಾ ಯೆಹೋವನನ್ನು ಕೊಂಡಾಡಬೇಕು
(ಕೀರ್ತ. 66)
1ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ;ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ.
2ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ;ಯೆಹೋವನ ಸತ್ಯತೆಯು ಸದಾ ಇರುವುದು.
ಯೆಹೋವನಿಗೆ ಸ್ತೋತ್ರ!
118ಹಬ್ಬದ ಗೀತೆ
(ನೆಹೆ. 8:14-18; ಯೆಶಾ. 12)
1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ;ಆತನು ಒಳ್ಳೆಯವನು.
ಆತನ ಕೃಪೆಯು ಶಾಶ್ವತವಾಗಿದೆ.
2ಇಸ್ರಾಯೇಲರು, <<ಆತನ ಕೃಪೆಯು ಶಾಶ್ವತ>> ಎಂದು ಹೇಳಲಿ. 3ಆರೋನನ ಮನೆತನದವರು, <<ಆತನ ಕೃಪೆಯು ಶಾಶ್ವತ>> ಎಂದು ಹೇಳಲಿ.
4ಯೆಹೋವನ ಭಕ್ತರು, <<ಆತನ ಕೃಪೆಯು ಶಾಶ್ವತ>> ಎಂದು ಹೇಳಲಿ. 5ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು;ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.
6ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು.ಮನುಷ್ಯನು ನನಗೆ ಏನು ಮಾಡಾನು?
7ಯೆಹೋವನು ನನಗೆ ಇದ್ದಾನೆ;ಆತನೇ ನನಗೆ ಸಹಾಯಕನು;
ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು.
8ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ,ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
9ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ,ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
10ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು;ಯೆಹೋವನ ಬಲದಿಂದ ಅವರನ್ನು ಸಂಹರಿಸುವೆನು.
11ಅವರು ನನ್ನನ್ನು ಸುತ್ತಲೂ ಮುತ್ತಿದರು;ಯೆಹೋವನ ಹೆಸರಿನ ಬಲದಿಂದ ಅವರನ್ನು ಸಂಹರಿಸುವೆನು.
12ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ;ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು.
ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು.
13ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ;ಆದರೆ ಯೆಹೋವನು ನನಗೆ ಸಹಾಯ ಮಾಡಿದನು.
14ನನ್ನ ಬಲವು, ಕೀರ್ತನೆಯು ಯೆಹೋವನೇ;ಆತನಿಂದ ನನಗೆ ರಕ್ಷಣೆಯುಂಟಾಯಿತು.
15ಉತ್ಸಾಹಧ್ವನಿಯು, ಜಯಘೋಷವು ನೀತಿವಂತರ ಗುಡಾರಗಳಲ್ಲಿವೆ;ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
16ಯೆಹೋವನ ಬಲಗೈ ಉನ್ನತವಾಗಿದೆ;ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.
17ನಾನು ಸಾಯುವುದಿಲ್ಲ;ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು.
18ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು;ಆದರೆ ಮರಣಕ್ಕೆ ಒಪ್ಪಿಸಲಿಲ್ಲ.
19ನೀತಿದ್ವಾರಗಳನ್ನು ತೆರೆಯಿರಿ;ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು.
20ಇದು ಯೆಹೋವನ ಮಂದಿರದ್ವಾರವು;ಇದರೊಳಗೆ ಪ್ರವೇಶಿಸತಕ್ಕವರು ನೀತಿವಂತರೇ.
21ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ,ನಿನ್ನನ್ನು ಕೊಂಡಾಡುತ್ತೇನೆ.
22ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ,ಮುಖ್ಯವಾದ ಮೂಲೆಗಲ್ಲಾಯಿತು;
23ಇದು ಯೆಹೋವನಿಂದಲೇ ಆಯಿತು;ನಮಗೆ ಆಶ್ಚರ್ಯವಾಗಿ ತೋರುತ್ತದೆ.
24ಈ ದಿನವು ಯೆಹೋವನಿಂದಲೇ ನೇಮಕವಾದದ್ದು;ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ.
25ಯೆಹೋವನೇ, ದಯವಿಟ್ಟು ರಕ್ಷಿಸು;ಯೆಹೋವನೇ, ದಯವಿಟ್ಟು ಸಾಫಲ್ಯಕೊಡು.
26ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ;ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.
27ಯೆಹೋವನೇ ದೇವರು;ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ.
ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ
ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.
28ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ;ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.
29ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ;ಆತನು ಒಳ್ಳೆಯವನು.
ಆತನ ಕೃಪೆಯು ಶಾಶ್ವತವಾದದ್ದು.
119ಧರ್ಮಶಾಸ್ತ್ರದ ಮಹತ್ವವನ್ನು ವರ್ಣಿಸುವ ಇಬ್ರಿಯ ಅಕ್ಷರ ಕ್ರಮಾನುಸಾರವಾದ ಕೀರ್ತನೆ
(ಕೀರ್ತ. 19:7-11)
ಆಲೆಫ್.
ಧರ್ಮಶಾಸ್ತ್ರದ ಅನುಕರಣೆ
1ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ,ಸದಾಚಾರಿಗಳಾಗಿ ನಡೆಯುವವರು ಧನ್ಯರು.
2ಆತನ ಕಟ್ಟಳೆಗಳನ್ನು ಕೈಕೊಂಡು,ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.
3ಅವರು ಆತನ ಮಾರ್ಗದಲ್ಲಿ ನಡೆಯುತ್ತಾರೆ,ಅನ್ಯಾಯ ಮಾಡುವುದೇ ಇಲ್ಲ.
4ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು,ನೀನೇ ಆಜ್ಞಾಪಿಸಿರುತ್ತಿ.
5ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ,ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು!
6ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ,ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ.
7ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ,ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು.
8ನಿನ್ನ ಕಟ್ಟಳೆಗಳನ್ನು ಅನುಸರಿಸುವ ನನ್ನನ್ನು,ಸಂಪೂರ್ಣವಾಗಿ ಕೈಬಿಡಬೇಡ.
ಬೇತ್.
ಉಪದೇಶಯುಕ್ತವಾದ ಯೆಹೋವನ ಕಟ್ಟಳೆಗಳು
9ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ?ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.
10ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ,ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.
11ನಿನಗೆ ವಿರುದ್ಧವಾಗಿ ಪಾಪಮಾಡದಂತೆ,ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.
12ಸ್ತುತಿಪಾತ್ರನಾದ ಯೆಹೋವನೇ,ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
13ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು,ನನ್ನ ತುಟಿಗಳು ವರ್ಣಿಸುತ್ತವೆ.
14ಸರ್ವಸಂಪತ್ತಿನಲ್ಲಿ ಹೇಗೋ,ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.
15ನಿನ್ನ ನಿಯಮಗಳನ್ನು ಧ್ಯಾನಿಸುತ್ತಾ,ನಿನ್ನ ದಾರಿಯನ್ನು ಲಕ್ಷಿಸುವೆನು.
16ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು,ನಿನ್ನ ವಾಕ್ಯವನ್ನು ಮರೆಯುವುದಿಲ್ಲ.
ಗಿಮೆಲ್.
ದೇವರಾಜ್ಞೆಗಳಲ್ಲಿ ಸಂತೋಷಿಸುವುದು
17ನಿನ್ನ ಸೇವಕನಾದ ನನ್ನ ಮೇಲೆ ದಯವಿಡು,ಆಗ ಜೀವದಿಂದಿದ್ದು ನಿನ್ನ ವಾಕ್ಯವನ್ನು ಕೈಗೊಳ್ಳುವೆನು.
18ನನ್ನ ಕಣ್ಣುಗಳನ್ನು ತೆರೆ,ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.
19ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ,ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.
20ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವನನ್ನ ಪ್ರಾಣವು ಜಜ್ಜಿಹೋಗಿದೆ.
21ನೀನು ಗರ್ವಿಷ್ಠರನ್ನು ಗದರಿಸುತ್ತಿ,ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು.
22ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದರಿಂದ,ನನಗಿರುವ ನಿಂದೆ, ಅಪಮಾನಗಳನ್ನು ತೊಲಗಿಸು.
23ಪ್ರಭುಗಳು ಕುಳಿತುಕೊಂಡು,ನನಗೆ ವಿರುದ್ಧವಾಗಿ ಒಳಸಂಚು ಮಾಡಿದರೂ,
ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು.
24ನಿನ್ನ ಕಟ್ಟಳೆಗಳು ನನ್ನ ಪರಮಾನಂದ,ಅವೇ ನನ್ನ ಮಾರ್ಗದರ್ಶನ.
ದಾಲಿತ್.
ಆಜ್ಞಾಮಾರ್ಗದಲ್ಲಿ ನಡೆಯುವ ನಿರ್ಧಾರ
25ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ,ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
26ನನ್ನ ಯಾತ್ರಾನುಭವವನ್ನು ನಿನಗೆ ಹೇಳಿಕೊಂಡಾಗ,ನನಗೆ ಸದುತ್ತರವನ್ನು ದಯಪಾಲಿಸಿದಿ,
ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.
27ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು,ಆಗ ನಿನ್ನ ಬೋಧನೆಗಳನ್ನು ಧ್ಯಾನಿಸುವೆನು.
28ಮನೋವ್ಯಥೆಯಿಂದ ಕಣ್ಣೀರು ಸುರಿಸುತ್ತೇನೆ,ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಬಲಪಡಿಸು.
29ತಪ್ಪಾದ ಮಾರ್ಗವನ್ನು ನನ್ನಿಂದ ದೂರಮಾಡು,ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು.
30ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ,ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ.
31ನಾನು ನಿನ್ನ ಕಟ್ಟಳೆಗಳನ್ನು ಅಪ್ಪಿಕೊಂಡಿದ್ದೇನೆ,ಯೆಹೋವನೇ, ನನಗೆ ಆಶಾಭಂಗಪಡಿಸಬೇಡ.
32ನೀನು ನನ್ನ ಅಂತರಾತ್ಮವನ್ನು ವಿಮೋಚಿಸು,ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು.
ಹೇ.
ಮಾರ್ಗದರ್ಶನಕ್ಕಾಗಿ ಪ್ರಾರ್ಥನೆ
33ಯೆಹೋವನೇ, ನಿನ್ನ ಕಟ್ಟಳೆಗಳಮಾರ್ಗವನ್ನು ನನಗೆ ಉಪದೇಶಿಸು,
ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು.
34ನನಗೆ ತಿಳಿವಳಿಕೆಯನ್ನು ದಯಪಾಲಿಸು,ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.
35ನಿನ್ನ ಆಜ್ಞಾಮಾರ್ಗದಲ್ಲಿ ನನ್ನನ್ನು ನಡೆಸು,ಅದೇ ನನ್ನ ಇಷ್ಟ.
36ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ,ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು.
37ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು,ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.
38ನಿನ್ನಲ್ಲಿ ಭಯಭಕ್ತಿಯುಳ್ಳವರಿಗಾಗಿ ನೀನು ಮಾಡಿದ ವಾಗ್ದಾನಗಳನ್ನು,ನಿನ್ನ ಸೇವಕನ ವಿಷಯದಲ್ಲಿ ನೆರವೇರಿಸು.
39ನನ್ನ ಅವಮಾನವನ್ನು ತೊಲಗಿಸು,ಅದಕ್ಕೋಸ್ಕರ ಅಂಜುತ್ತಿದ್ದೇನೆ.
ನಿನ್ನ ಕಟ್ಟಳೆಗಳು ಹಿತಕರವಾಗಿವೆ.
40ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ,ನಿನ್ನ ನೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
ವಾವ್.
ಭರವಸಕ್ಕೆ ಆಧಾರವಾದ ದೇವರ ಕಟ್ಟಳೆಗಳು
41ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ,ನಿನ್ನ ನುಡಿಗನುಸಾರವಾಗಿ ನನಗೆ ರಕ್ಷಣೆಯುಂಟಾಗಲಿ.
42ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು,ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ.
43ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ.ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ.
44ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಗೊಳ್ಳುವೆನು. 45ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ,ಸರಾಗವಾಗಿ ನಡೆಯುವೆನು.
46ನಿನ್ನ ಕಟ್ಟಳೆಗಳ ವಿಷಯವಾಗಿ,ಅರಸುಗಳ ಮುಂದೆಯೂ ಮಾತನಾಡುವೆನು,
ನಾಚಿಕೆಪಡುವುದಿಲ್ಲ.
47ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ,ಅವು ನನಗೆ ಇಷ್ಟವಾಗಿವೆ.
48ನಿನ್ನ ಆಜ್ಞೆಗಳನ್ನು ಗೌರವಿಸುತ್ತೇನೆ,ಅವುಗಳನ್ನು ನಾನು ಪ್ರೀತಿಸುತ್ತೇನೆ,
ನಿನ್ನ ನಿಬಂಧನೆಗಳನ್ನು ಧ್ಯಾನಿಸುತ್ತೇನೆ.
ಸಾಯಿನ್.
ಚೈತನ್ಯಗೊಳಿಸುವ ಯೆಹೋವನ ನುಡಿ
49ನಿನ್ನ ವಾಗ್ದಾನವನ್ನು ನಿನ್ನ ಸೇವಕನಿಗೋಸ್ಕರ ನೆನಪುಮಾಡಿಕೋ,ನನ್ನಲ್ಲಿ ನಿರೀಕ್ಷೆಯನ್ನು ಹುಟ್ಟಿಸಿದ್ದಿಯಲ್ಲಾ!
50ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ,ಆಪತ್ಕಾಲದಲ್ಲಿ ಇದೇ ನನಗೆ ಆದರಣೆ.
51ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು,ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.
52ಯೆಹೋವನೇ, ನಿನ್ನ ಪುರಾತನ ಉಪದೇಶಾಜ್ಞೆಗಳನ್ನು ನೆನಪುಮಾಡಿಕೊಂಡು,ನನ್ನನ್ನು ಸಂತೈಸಿಕೊಂಡಿದ್ದೇನೆ.
53ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ.
54ನನ್ನ ಪ್ರವಾಸದ ಮನೆಯಲ್ಲಿನಿನ್ನ ಕಟ್ಟಳೆಗಳು ನನಗೆ ಗಾಯನವಾದವು.
55ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ,ನಿನ್ನ ಧರ್ಮಶಾಸ್ತ್ರವನ್ನು ಕೈಗೊಳ್ಳುತ್ತೇನೆ.
56ನಿನ್ನ ನಿಯಮಗಳನ್ನು ಅನುಸರಿಸಿದ್ದರಿಂದ ಇದೆಲ್ಲಾ ನನಗೆ ಲಭಿಸಿತು.
ಹೇತ್.
ಯೆಹೋವನ ನೀತಿವಿಧಿಗಳಲ್ಲಿ ಆಸಕ್ತಿ
57ಯೆಹೋವನೇ, ನನ್ನ ಪಾಲು ನೀನೇ,ನಿನ್ನ ವಾಕ್ಯಗಳನ್ನು ಕೈಗೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ.
58ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ,ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.
59ನನ್ನ ನಡತೆಯನ್ನು ಶೋಧಿಸಿದೆನು,ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.
60ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು,ಆಲಸ್ಯಮಾಡಲಿಲ್ಲ.
61ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು,ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ.
62ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು,ಮಧ್ಯರಾತ್ರಿಯಲ್ಲಿ ಏಳುವೆನು.
63ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆನಾನು ಸಂಗಡಿಗನು.
64ಯೆಹೋವನೇ, ಭೂಲೋಕವು ನಿನ್ನ ಶಾಶ್ವತ ಪ್ರೀತಿಯಿಂದ ತುಂಬಿದೆ,ನಿನ್ನ ಕಟ್ಟಳೆಗಳನ್ನು ನನಗೆ ಬೋಧಿಸು.
ಟೇತ್.
ದೇವರಾಜ್ಞೆಗಳ ಮೌಲ್ಯ
65ಯೆಹೋವನೇ, ನೀನು ನಿನ್ನ ವಾಗ್ದಾನಕ್ಕೆ ತಕ್ಕಂತೆ,ನಿನ್ನ ಸೇವಕನಿಗೆ ಮಹೋಪಕಾರ ಮಾಡಿದ್ದಿ.
66ಸುಜ್ಞಾನವನ್ನು, ವಿವೇಕಗಳನ್ನು ನನಗೆ ಕಲಿಸಿಕೊಡು,ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ.
67ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು,ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ.
68ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ,ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.
69ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ,ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
70ಅವರ ಹೃದಯದಲ್ಲಿ ಸತ್ಯವಿಲ್ಲ ,ನಾನಾದರೋ ನಿನ್ನ ಧರ್ಮಶಾಸ್ತ್ರದಲ್ಲಿ ಉಲ್ಲಾಸಪಡುತ್ತೇನೆ.
71ಕಷ್ಟಾನುಭವವು ಹಿತಕರವಾಯಿತು,ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.
72ನೀನು ಕೊಟ್ಟ ಧರ್ಮಶಾಸ್ತ್ರವು,ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ.
ಯೋದ್.
ನ್ಯಾಯಬದ್ಧವಾದ ಕಟ್ಟಳೆಗಳು
73ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು,ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು.
74ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ,ನಾನು ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನಲ್ಲಾ.
75ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ,ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.
76ನಿನ್ನ ಸೇವಕನಿಗೆ ನುಡಿದ ಪ್ರಕಾರ,ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು.
77ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ,ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.
78ಗರ್ವಿಷ್ಠರು ಮಾನಭಂಗ ಹೊಂದಲಿ,ಅವರು ಮೋಸದಿಂದ ನನಗೆ ಕೇಡು ಮಾಡಿದ್ದಾರೆ.
ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುತ್ತಿರುವೆನು.
79ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನ ಕಡೆಗೆ ತಿರುಗಿಕೊಂಡು,ನಿನ್ನ ಕಟ್ಟಳೆಗಳನ್ನು ಗ್ರಹಿಸಿಕೊಳ್ಳಲಿ.
80ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ,ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ.
ಕಾಫ್.
ವಿಮೋಚನೆಗಾಗಿ ವಿಜ್ಞಾಪನೆ
81ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು,ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.
82ನಿನ್ನ ನುಡಿಯನ್ನು ನೆರವೇರಿಸಿ ಯಾವಾಗ ನನ್ನನ್ನು ಸಂತೈಸುವಿ?ಎಂಬುವುದಕ್ಕೋಸ್ಕರವೇ ನನ್ನ ದೃಷ್ಟಿಯು ಮಂದವಾಯಿತು.
83ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ,ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ.
84ನಿನ್ನ ಸೇವಕನ ದಿನಗಳು ಬಹುಸ್ವಲ್ಪವಲ್ಲಾ!ನನ್ನನ್ನು ಬಾಧಿಸುವವರಿಗೆ ಶಿಕ್ಷೆ ವಿಧಿಸುವುದು ಯಾವಾಗ?
85ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರುನನಗಾಗಿ ಗುಂಡಿಗಳನ್ನು ತೋಡಿದ್ದಾರೆ.
86ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ,ಅವರು ಮೋಸದಿಂದ ಹಿಂಸಿಸುತ್ತಾರೆ,
ನನಗೆ ಸಹಾಯಮಾಡು.
87ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು,ಆದರೆ ನಾನು ನಿನ್ನ ನಿಯಮಗಳನ್ನು ಬಿಡಲೇ ಇಲ್ಲ.
88ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಕಾಪಾಡು,ಆಗ ನೀನು ಆಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳುವೆನು.
ಲಾಮೆದ್.
ಘನವಾದ ಆಜ್ಞಾಶಾಸನ
89ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ.
90ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು.ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ.
91ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ,ಸ್ಥಿರವಾಗಿ ನಿಂತಿರುತ್ತವೆ.
ಏಕೆಂದರೆ ಸರ್ವವಸ್ತುಗಳೂ ನಿನ್ನ ಸೇವೆ ಮಾಡುತ್ತವೆ.
92ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ,ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು.
93ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ,ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ.
94ನಾನು ನಿನ್ನವನು, ರಕ್ಷಿಸು,ನಿನ್ನ ನಿಯಮಗಳಲ್ಲಿ ಆಸಕ್ತನಾಗಿದ್ದೇನಲ್ಲಾ.
95ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ,ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು.
96ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು,ಆದರೆ ನಿನ್ನ ಆಜ್ಞಾಶಾಸನವು ಅಪರಿಮಿತವಾದದ್ದು.
ಮೆಮ್.
ಜ್ಞಾನವಂತರನ್ನಾಗಿ ಮಾಡುವ ಧರ್ಮಶಾಸ್ತ್ರ
97ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ,ದಿನವೆಲ್ಲಾ ಅದೇ ನನ್ನ ಧ್ಯಾನ.
98ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ,ಸದಾಕಾಲವೂ ಅವೇ ನನಗಿವೆ.
99ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ,ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.
100ನಿನ್ನ ನಿಯಮಗಳನ್ನು ಕೈಗೊಂಡಿರುವುದರಿಂದ,ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.
101ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು,ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ.
102ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ,ಏಕೆಂದರೆ ನೀನು ನನಗೆ ಬೋಧಿಸಿದ್ದೀ.
103ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ,ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.
104ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು,ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ.
ನೂನ್.
ದೇವರ ವಾಕ್ಯ ಕಾಲಿಗೆ ದೀಪ, ದಾರಿಗೆ ಬೆಳಕು
105ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ,ನನ್ನ ದಾರಿಗೆ ಬೆಳಕೂ ಆಗಿದೆ.
106ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ,ಅದನ್ನು ನೆರವೇರಿಸುವೆನು.
107ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ,ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
108ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು,ದಯವಿಟ್ಟು ಅಂಗೀಕರಿಸು,
ನಿನ್ನ ವಿಧಿಗಳನ್ನು ನನಗೆ ಕಲಿಸು.
109 ನನ್ನ ಜೀವವು ಅಪಾಯದಲ್ಲಿದ್ದೆ,ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ.
110ದುಷ್ಟರು ಬಲೆಯೊಡ್ಡಿದ್ದಾರೆ,ನಾನು ನಿನ್ನ ನಿಯಮಗಳಿಂದ ತಪ್ಪಿಹೋಗುವುದಿಲ್ಲ.
111ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ,ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.
112ಕಡೆಯವರೆಗು ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಗೊಳ್ಳುವುದಕ್ಕೆ ಮನಸ್ಸುಮಾಡಿದ್ದೇನೆ.
ಸಾಮೆಕ್.
ಆಶ್ರಯವಾಗಿರುವ ದೇವರಾಜ್ಞೆಗಳು
113ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ,ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ.
114ನನ್ನ ಆಶ್ರಯವೂ, ಗುರಾಣಿಯೂ ನೀನೇ,ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ.
115ದುಷ್ಟರೇ, ತೊಲಗಿರಿ,ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.
116ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು,ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ,
ನನ್ನನ್ನು ನಿರಾಶೆಪಡಿಸಬೇಡ.
117ನೀನು ನನಗೆ ಆಧಾರವಾಗಿರು,ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು.
118ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ,ಅವರ ಕುಯುಕ್ತಿಯು ವ್ಯರ್ಥವಾದದ್ದೇ.
119ಭೂಲೋಕದ ದುಷ್ಟರೆಲ್ಲರನ್ನು ಕಸದಂತೆ ತೆಗೆದುಬಿಡುತ್ತೀ,ಆದುದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.
120ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ,ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.
ಆಯಿನ್.
ಅಪರಂಜಿಗಿಂತಲೂ ಶ್ರೇಷ್ಠವಾದ ದೇವರ ವಾಕ್ಯಗಳು
121ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ,ಬಲಾತ್ಕಾರಿಗಳಿಗೆ ನನ್ನನ್ನು ಒಪ್ಪಿಸಬೇಡ.
122ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು,ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.
123ನಿನ್ನ ರಕ್ಷಣೆಯನ್ನೂ, ನಿನ್ನ ನೀತಿಯುಳ್ಳ ನುಡಿಯು ನೆರವೇರುವುದನ್ನೂ ನಿರೀಕ್ಷಿಸುತ್ತಾ,ನನ್ನ ದೃಷ್ಟಿ ಮೊಬ್ಬಾಯಿತು.
124ನಿನ್ನ ಸೇವಕನನ್ನು ಕೃಪೆಯಿಂದ ನಡೆಸು,ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
125ನಾನು ನಿನ್ನ ಸೇವಕನು,ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು.
126ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ,ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.
127ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ,ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.
128ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ,ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ.
ಪೆ.
ಕಟ್ಟಳೆಗಳನ್ನು ಪಾಲಿಸುವ ತವಕ
129ನಿನ್ನ ಕಟ್ಟಳೆಗಳು ಮಹತ್ವವುಳ್ಳವುಗಳೇ,ಪೂರ್ಣಹೃದಯದಿಂದ ಅವುಗಳನ್ನು ಕೈಗೊಳ್ಳುತ್ತೇನೆ.
130ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ,ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.
131ನಾನು ಬಾಯಾರಿ ನಿನ್ನನ್ನೇ ಎದುರುನೋಡುತ್ತಿದ್ದೇನೆ,ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಬಯಸಿದ್ದೇನೆ.
132ನನಗೆ ಅಭಿಮುಖನಾಗಿ ಕರುಣಿಸು,ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ?
133ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು,ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.
134ನರ ಮನುಷ್ಯರ ಬಲಾತ್ಕಾರದಿಂದ ನನ್ನನ್ನು ಬಿಡಿಸು,ಆಗ ನಿನ್ನ ನಿಯಮಗಳನ್ನು ಕೈಗೊಳ್ಳುವೆನು.
135ನಿನ್ನ ದಾಸನ ಮೇಲೆ ನಿನ್ನ ಮುಖಪ್ರಸನ್ನತೆಯಿರಲಿ,ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
136ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ,ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.
ಸಾದ್ದಿ.
ಯೆಹೋವನ ನ್ಯಾಯ ವಿಧಿಗಳು
137ಯೆಹೋವನೇ, ನೀನು ನೀತಿಸ್ವರೂಪನು,ನಿನ್ನ ವಿಧಿಗಳು ನ್ಯಾಯವಾಗಿವೆ.
138ನೀತಿ, ಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದಿ, 139ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು,
140ನಿನ್ನ ನುಡಿಯು ಪರಿಶುದ್ಧವಾದದ್ದು,ನಿನ್ನ ಸೇವಕನು ಅದನ್ನೇ ಪ್ರೀತಿಸುತ್ತಾನೆ.
141ನಾನು ಅಲ್ಪನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ,ಆದರೂ ನಿನ್ನ ನಿಯಮಗಳನ್ನು ಮರೆಯುವುದಿಲ್ಲ.
142ನಿನ್ನ ನೀತಿಯು ನಿತ್ಯವಾಗಿದೆ,ನಿನ್ನ ಧರ್ಮಶಾಸ್ತ್ರವು ಸತ್ಯವಾಗಿದೆ.
143ಕಷ್ಟ, ಸಂಕಟಗಳು ನನ್ನನ್ನು ಮುತ್ತಿಕೊಂಡಿವೆ,ಆದರೂ ನಿನ್ನ ಆಜ್ಞೆಗಳು ನನಗೆ ಸಂತೋಷಕರವಾಗಿವೆ.
144ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು,ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು.
ಖೋಫ್.
ಯೆಹೋವನಿಗೆ ಮೊರೆಯಿಡುವುದು
145ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ,ಸದುತ್ತರವನ್ನು ದಯಪಾಲಿಸು,
ನಿನ್ನ ನಿಬಂಧನೆಗಳನ್ನು ಅನುಸರಿಸುವೆನು.
146ನಿನಗೇ ಮೊರೆಯಿಟ್ಟಿದ್ದೇನೆ ರಕ್ಷಿಸು.ನಿನ್ನ ಕಟ್ಟಳೆಗಳನ್ನು ಕೈಗೊಳ್ಳುವೆನು.
147ಅರುಣೋದಯದಲ್ಲಿ ಎದ್ದು ಮೊರೆಯಿಟ್ಟೆನು,ನಿನ್ನ ವಾಕ್ಯವನ್ನು ನಿರೀಕ್ಷಿಸಿಕೊಂಡಿದ್ದೇನೆ.
148ನಿನ್ನ ನುಡಿಯನ್ನು ಧ್ಯಾನಿಸಲು,ನನ್ನ ಕಣ್ಣುಗಳು ಇರುಳಿನ ಒಂದೊಂದು ಜಾವದಲ್ಲೂ ತೆರೆದಿರುತ್ತವೆ.
149ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು,ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
150ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು,ನನ್ನ ಸಮೀಪಕ್ಕೆ ಬಂದಿದ್ದಾರೆ.
151ಯೆಹೋವನೇ, ನೀನು ನನ್ನ ಹತ್ತಿರವೇ ಇರುವೆ,ನಿನ್ನ ಆಜ್ಞೆಗಳೆಲ್ಲಾ ಯಥಾರ್ಥವಾಗಿವೆ.
152ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು,ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ.
ರೇಷ್.
ಸಂರಕ್ಷಣೆಗಾಗಿ ವಿಜ್ಞಾಪನೆ
153ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು,ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.
154ನನ್ನ ವ್ಯಾಜ್ಯವನ್ನು ನಡೆಸಿ ನನ್ನನ್ನು ಬಿಡಿಸು,ನಿನ್ನ ನುಡಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
155ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.
156ಯೆಹೋವನೇ, ನಿನ್ನ ಕೃಪಾಕಾರ್ಯಗಳು ಬಹಳವಾಗಿವೆ,ನಿನ್ನ ವಿಧಿಗಳಿಗೆ ತಕ್ಕಂತೆ ನನ್ನನ್ನು ಚೈತನ್ಯಗೊಳಿಸು.
157ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ,ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ನಡೆಯಲಿಲ್ಲ.
158ನಿನ್ನ ನುಡಿಯನ್ನು ಕೈಗೊಳ್ಳದಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.
159ಯೆಹೋವನೇ, ನೋಡು,ನಿನ್ನ ನಿಯಮಗಳು ನನಗೆ ಎಷ್ಟೋ ಪ್ರಿಯವಾಗಿವೆ,
ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
160ನಿನ್ನ ವಾಕ್ಯದ ಸಾರಾಂಶವು ಸತ್ಯವೇ,ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು.
ಷಿನ್.
ಎಷ್ಟೋ ಪ್ರಿಯವಾದ ನೀತಿವಿಧಿಗಳು
161ಪ್ರಭುಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ,ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ.
162ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ,ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.
163ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ,ಅದು ನನಗೆ ಅಸಹ್ಯವಾಗಿದೆ,
ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ.
164ನಿನ್ನ ನೀತಿವಿಧಿಗಳಿಗೋಸ್ಕರ,ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ.
165ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ,ಸಂಪೂರ್ಣ ಸಮಾಧಾನವಿರುತ್ತದೆ,
ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.
166ಯೆಹೋವನೇ, ಯಾವಾಗ ರಕ್ಷಿಸುವಿಯೋ ಎಂದು,ನಿರೀಕ್ಷಿಸುತ್ತಾ ಇದ್ದೇನೆ,
ನಿನ್ನ ಆಜ್ಞೆಗಳನ್ನು ಕೈಗೊಂಡಿದ್ದೇನೆ.
167ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ,ಅವು ನನಗೆ ಬಹುಪ್ರಿಯವಾಗಿವೆ.
168ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ,ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
ತಾವ್.
ಯೆಹೋವನ ಸಹಾಯಕ್ಕಾಗಿ ಬೇಡಿಕೊಳ್ಳುವುದು
169ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ,ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು.
170ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ,ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು.
171ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ.ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ,
172ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ,ನಿನ್ನ ಆಜ್ಞೆಗಳೆಲ್ಲಾ ನೀತಿಯುಳ್ಳದ್ದು.
173ನಿನ್ನ ನಿಯಮಗಳನ್ನು ಆರಿಸಿಕೊಂಡಿದ್ದೇನೆ,ನಿನ್ನ ಕೈ ನನಗೆ ನೆರವಾಗಲಿ.
174ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ,ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.
175ನನ್ನ ಪ್ರಾಣವನ್ನು ಉಳಿಸು,ಅದು ನಿನ್ನನ್ನು ಕೊಂಡಾಡಲಿ.
ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ.
176ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ,ನಿನ್ನ ಸೇವಕನನ್ನು ಪರಾಂಬರಿಸು.
ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.
120ಮೋಸಗಾರರ ಮಧ್ಯದಲ್ಲಿ ವಾಸಿಸುವವನ ಪ್ರಾರ್ಥನೆ
ಯಾತ್ರಾಗೀತೆ.
1ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು;ಆತನು ಸದುತ್ತರವನ್ನು ದಯಪಾಲಿಸಿದನು.
2ಯೆಹೋವನೇ, ಸುಳ್ಳು ಬಾಯಿಯೂ,ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.
3ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು?ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?
4ಶೂರನ ಹದವಾದ ಬಾಣಗಳನ್ನೂ,ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.
5ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ!ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!
6ಸಮಾಧಾನವನ್ನು ದ್ವೇಷಿಸುವವರೊಳಗೆ,ಇದ್ದು ಇದ್ದು ಸಾಕಾಯಿತು.
7ನಾನು ಸಮಾಧಾನಪ್ರಿಯನು;ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.
121ಯೆಹೋವನ ಭಕ್ತಪಾಲನೆ
ಯಾತ್ರಾಗೀತೆ.
(ಆದಿ. 28:15)
1ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ;ನನ್ನ ಸಹಾಯವು ಎಲ್ಲಿಂದ ಬರುವುದು?
2ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ,ನನ್ನ ಸಹಾಯವು ಬರುತ್ತದೆ.
3ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ;ನಿನ್ನನ್ನು ಕಾಯುವವನು ತೂಕಡಿಸದಿರಲಿ.
4ಇಗೋ, ಇಸ್ರಾಯೇಲರನ್ನು ಕಾಯುವಾತನು,ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ.
5ನಿನ್ನನ್ನು ಕಾಯುವವನು ಯೆಹೋವನೇ;ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.
6ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ,ನಿನ್ನನ್ನು ಬಾಧಿಸುವುದಿಲ್ಲ.
7ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು;ನಿನ್ನ ಪ್ರಾಣವನ್ನು ಕಾಯುವನು.
8ನೀನು ಹೋಗುವಾಗಲೂ, ಬರುವಾಗಲೂ,ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.
122ಯಾತ್ರಿಕರು ಯೆರೂಸಲೇಮನ್ನು ಸ್ಮರಿಸುವುದು
ಯಾತ್ರಾಗೀತೆ; ದಾವೀದನ ಕೀರ್ತನೆ.
1<<ಯೆಹೋವನ ಮಂದಿರಕ್ಕೆ ಹೋಗೋಣ ಬಾ!>>ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.
2ಯೆರೂಸಲೇಮೇ! ನಮ್ಮ ಕಾಲುಗಳು,ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ.
3ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ,ಕಟ್ಟಲ್ಪಟ್ಟ ನಗರವಾಗಿದ್ದಿ.
4ಕುಲಗಳು ಅಂದರೆ ಯೆಹೋವನ ಕುಲದವರು,ಯೆಹೋವನ ನಾಮದ ಕೀರ್ತನೆಗೋಸ್ಕರ,
ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು.
ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.
5ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ,ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.
6ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ.<<ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.
7ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ;ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.>>
8ನನ್ನ ಬಂಧುಮಿತ್ರರ ನಿಮಿತ್ತವಾಗಿ,<<ನಿನಗೆ ಸಮಾಧಾನವಾಗಲಿ>> ಎಂದು ಹೇಳುತ್ತೇನೆ.
9ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ,ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.
123ಬಾಧಿಸಲ್ಪಟ್ಟವನ ನಿರೀಕ್ಷೆ
ಯಾತ್ರಾಗೀತೆ.
(ನೆಹೆ. 4:1-6)
1ಪರಲೋಕದಲ್ಲಿ ಆಸೀನನಾಗಿರುವಾತನೇ,ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.
2ಯಜಮಾನನ ಕೈಯನ್ನು ದಾಸನ ಕಣ್ಣುಗಳು,ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ,
ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ,
ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.
3ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು.ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;
4ಲೋಕಭೋಗಿಗಳ ಹಾಸ್ಯದಿಂದಲೂ,ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.
124ಯೆಹೋವನೊಬ್ಬನೇ ರಕ್ಷಕನು
ಯಾತ್ರಾಗೀತೆ; ದಾವೀದನದು.
(ಕೀರ್ತ. 129; ನೆಹೆ. 4:7-23)
1<<ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?>>,ಎಂದು ಇಸ್ರಾಯೇಲರೇ ಹೇಳಲಿ.
2ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ,ಯೆಹೋವನು ನಮಗಿಲ್ಲದಿದ್ದರೆ,
3<<ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು,ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;
4ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು;ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು;
5ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.>> 6ಯೆಹೋವನಿಗೆ ಕೊಂಡಾಟವಾಗಲಿ;ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ.
7ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ;ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.
8ಭೂಮಿ, ಆಕಾಶಗಳನ್ನು ಉಂಟುಮಾಡಿದ,ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.
125ಯೆಹೋವನೇ ವಿಶ್ವಾಸಿಗಳ ಆಶ್ರಯ
ಯಾತ್ರಾಗೀತೆ.
1ಯೆಹೋವನಲ್ಲಿ ಭರವಸೆ ಇಡುವವರು,ಚೀಯೋನ್ ಪರ್ವತದ ಹಾಗೆ ಇದ್ದಾರೆ;
ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
2ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ,ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.
3ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ;ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.
4ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ,ಆಗಿರುವವರಿಗೆ ಉಪಕಾರಮಾಡು.
5ಯೆಹೋವನು ಡೊಂಕುದಾರಿ ಹಿಡಿದವರನ್ನು,ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು.
ಇಸ್ರಾಯೇಲರಿಗೆ ಶುಭವುಂಟಾಗಲಿ.
126ಚೀಯೋನಿನ ಸೌಭಾಗ್ಯದ ಪುನಃಸ್ಥಾಪನೆಗಾಗಿ ಪ್ರಾರ್ಥನೆ
ಯಾತ್ರಾಗೀತೆ.
(ಕೀರ್ತ. 85)
1 ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ,ನಾವು ಕನಸು ಕಂಡವರಂತೆ ಇದ್ದೆವು.
2ಆಗ ನಮ್ಮ ಬಾಯಿ ಬಲು ನಗೆಯಿಂದಲೂ,ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು.
ಅನ್ಯಜನರು, <<ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ>> ಎಂದು
ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
3ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ;ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.
4ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು.
5ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,
6ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು,ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.
127ಯೆಹೋವನ ಕೃಪೆಯಿಂದಲೇ ಕೃತಾರ್ಥರಾಗುವೆವು
ಯಾತ್ರಾಗೀತೆ; ಸೊಲೊಮೋನನದು.
(ನೆಹೆ. 7:3-4)
1ಯೆಹೋವನು ಮನೆಯನ್ನು ಕಟ್ಟದಿದ್ದರೆ,ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ;
ಯೆಹೋವನು ಪಟ್ಟಣವನ್ನು ಕಾಯದಿದ್ದರೆ,
ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.
2ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ,ಹೊತ್ತು ಮೀರಿ ಮಲಗುವವರೇ,
ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ;
ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.
3ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು;ಗರ್ಭಫಲವು ಆತನ ಬಹುಮಾನವೇ.
4ಯೌವನದಲ್ಲಿ ಹುಟ್ಟಿದ ಮಕ್ಕಳು,ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;
5ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು.ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ
ಅಂಥವರು ಅವಮಾನ ಹೊಂದುವುದಿಲ್ಲ.
128ಭಕ್ತನ ಭಾಗ್ಯ
ಯಾತ್ರಾಗೀತೆ.
(ಕೀರ್ತ. 127; 144:12-15)
1ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ,ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
2ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ,ನೀನು ಧನ್ಯನು, ನಿನಗೆ ಶುಭವಿರುವುದು.
3ಅಂತಃಪುರದಲ್ಲಿರುವ ನಿನ್ನ ಹೆಂಡತಿಯು,ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು;
ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು,
ಎಣ್ಣೇಮರದ ಸಸಿಗಳ ಹಾಗೆ ಇರುವರು.
4ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು,ಈ ರೀತಿಯಾಗಿ ಆಶೀರ್ವಾದ ಹೊಂದುವನು.
5ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ;ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.
6ಮಕ್ಕಳ ಮಕ್ಕಳನ್ನು ಕಾಣುವವನಾಗು.ಇಸ್ರಾಯೇಲರಿಗೆ ಶುಭವಾಗಲಿ.
129ಯೆಹೋವನು ತನ್ನ ಭಕ್ತರನ್ನು ಶತ್ರುಗಳಿಂದ ಬಿಡಿಸುವನೆಂಬ ನಿರೀಕ್ಷೆ
ಯಾತ್ರಾಗೀತೆ.
(ಕೀರ್ತ. 124)
1<<ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ>>ಎಂದು ಇಸ್ರಾಯೇಲರು ಹೇಳಲಿ.
2<<ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ,ಅವರು ನಮ್ಮನ್ನು ಜಯಿಸಲಿಲ್ಲ.
3ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ,ಉದ್ದವಾದ ಗೆರೆಗಳನ್ನು ಹಾಕಿದರು.>>
4ಆದರೆ ನೀತಿಸ್ವರೂಪನಾದ ಯೆಹೋವನು, ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು.
5ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ. 6ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ;ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ;
7ಅದನ್ನು ಕೊಯ್ಯುವವನ ಹಿಡಿಯೂ,ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.
8ಹಾದುಹೋಗುವವರು, <<ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು,ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ>> ಎಂದೂ ಹೇಳುವುದಿಲ್ಲ.
130ಪಾಪಪರಿಹಾರಕ್ಕಾಗಿ ಪ್ರಾರ್ಥನೆ
ಯಾತ್ರಾಗೀತೆ.
(ನೆಹೆ. 1:4-11)
1ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.
2ಕರ್ತನೇ, ನನ್ನ ಮೊರೆಯನ್ನು ಕೇಳು;ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ.
3ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?
4ನೀನು ಪಾಪವನ್ನು ಕ್ಷಮಿಸುವವನಾದುದರಿಂದ,ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.
5ನಾನು ಯೆಹೋವನನ್ನು ಎದುರುನೋಡುತ್ತೇನೆ;ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ;
ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.
6ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ;ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ,
ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.
7ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು;ಯೆಹೋವನು ಕೃಪಾಸಂಪನ್ನನು;
ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.
8ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು. 131ಭಕ್ತರ ದೀನಭಾವ
ಯಾತ್ರಾಗೀತೆ; ದಾವೀದನದು.
(ಜ್ಞಾನೋ. 23:26; ಮತ್ತಾ. 18:3)
1ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ;ನನಗೆ ಸೊಕ್ಕಿನ ಕಣ್ಣುಗಳಿಲ್ಲ;
ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.
2ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ;ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ,
ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.
3ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂಯೆಹೋವನನ್ನೇ ನಿರೀಕ್ಷಿಸಿಕೊಂಡಿರು.
132ದಾವೀದನ ಮನೆತನವನ್ನು ಪುನಃಸ್ಥಾಪಿಸಬೇಕೆಂಬ ಪ್ರಾರ್ಥನೆ
ಯಾತ್ರಾಗೀತೆ.
(ಕೀರ್ತ. 89; 2 ಸಮು. 7)
1ಯೆಹೋವನೇ, ದಾವೀದನ ಹಿತಕ್ಕೋಸ್ಕರ,ಅವನ ಶ್ರಮೆಗಳನ್ನು ನೆನಪುಮಾಡಿಕೋ.
2ಯಾಕೋಬನ ಶೂರನಾದ ಯೆಹೋವನಿಗಾಗಿಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,
3<<ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ,ಮಂಚವನ್ನು ಹತ್ತುವುದಿಲ್ಲ,
4ಕಣ್ಣುಗಳನ್ನು ಮುಚ್ಚುವುದಿಲ್ಲ,ರೆಪ್ಪೆಗಳನ್ನು ಕೂಡಿಸುವುದಿಲ್ಲ>> ಎಂದು
5ಅವನು ಯೆಹೋವನಿಗೆ ಪ್ರಮಾಣಮಾಡಿ,ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.
6ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು;ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು.
7<<ಬನ್ನಿರಿ, ಆತನ ಮಂದಿರಕ್ಕೆ ಹೋಗಿಆತನ ಪಾದಪೀಠದ ಮುಂದೆ ಅಡ್ಡಬೀಳೋಣ!>>
8ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ,ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು.
9ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ;ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ.
10ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ;ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ.
11ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ;ಆತನು ಅದನ್ನು ಬದಲಿಸುವುದಿಲ್ಲ.
<<ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;
12ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ,ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ,
ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.>>
13ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ,ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.
14ಆತನು, <<ಇದು ನನ್ನ ಶಾಶ್ವತ ವಾಸಸ್ಥಾನ;ಇಲ್ಲೇ ಇರುವೆನು; ಇದು ನನಗೆ ಇಷ್ಟ.
15ಇದರ ಆದಾಯವನ್ನು ಆಶೀರ್ವದಿಸುವೆನು;ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು;
16ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು;ಭಕ್ತರು ಉತ್ಸಾಹಧ್ವನಿ ಮಾಡುವರು.
17ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು;ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.
18ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು;ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.>>
133ಐಕಮತ್ಯವು ಶ್ರೇಷ್ಠವಾದುದು
ಯಾತ್ರಾಗೀತೆ; ದಾವೀದನದು.
1ಆಹಾ, ಸಹೋದರರು ಒಂದಾಗಿರುವುದು,ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!
2ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು,ಅವನ ಗಡ್ಡದ ಮೇಲೆಯೂ,
ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,
3ಹೆರ್ಮೋನ್ ಪರ್ವತದಲ್ಲಿ ಹುಟ್ಟಿ,ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ.
ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು,
ಯೆಹೋವನು ಆಜ್ಞಾಪಿಸಿದ್ದಾನೆ.
134ಸಂಧ್ಯಾಸೇವಕರಿಗೆ ಎಚ್ಚರಿಕೆ
ಯಾತ್ರಾಗೀತೆ.
1ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ,ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.
2ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ,ಯೆಹೋವನನ್ನು ಕೊಂಡಾಡಿರಿ.
3ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು,ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
135ಸೃಷ್ಟಿಪಾಲಕನಾಗಿರುವ ಏಕದೇವರಿಗೆ ಸ್ತೋತ್ರ
(ಕೀರ್ತ. 136)
1ಯೆಹೋವನಿಗೆ ಸ್ತೋತ್ರ!ಯೆಹೋವನ ನಾಮವನ್ನು ಸ್ತುತಿಸಿರಿ.
ಯೆಹೋವನ ಸೇವಕರೇ,
2ಯೆಹೋವನ ಮಂದಿರದಲ್ಲಿಯೂ,ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ,
ಆತನನ್ನು ಕೀರ್ತಿಸಿರಿ.
3ಯೆಹೋವನಿಗೆ ಸ್ತೋತ್ರ!ಯೆಹೋವನು ಒಳ್ಳೆಯವನು.
ಆತನ ನಾಮವನ್ನು ಕೊಂಡಾಡಿರಿ;
ಆತನು ಕೃಪಾಪೂರ್ಣನು.
4ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ,ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.
5ಯೆಹೋವನು ದೊಡ್ಡವನೆಂದೂ,ನಮ್ಮ ಕರ್ತನು ಎಲ್ಲಾ ದೇವರುಗಳಿಗಿಂತ ಹೆಚ್ಚಿನವನೆಂದೂ ತಿಳಿದಿದ್ದೇನೆ.
6ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ,ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ
ತನಗೆ ಬೇಕಾದದ್ದನ್ನು ಮಾಡುತ್ತಾನೆ.
7ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ;ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ;
ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
8ಆತನು ಐಗುಪ್ತದ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ,ಚೊಚ್ಚಲುಗಳನ್ನೆಲ್ಲಾ ಸಂಹರಿಸಿದನು.
9ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ,ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು,
ಮಹತ್ಕಾರ್ಯಗಳನ್ನು ನಡೆಸಿದನು.
10ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು;ಬಲಿಷ್ಠ ರಾಜರನ್ನು ಕೊಂದುಹಾಕಿದನು.
11ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ,ಬಾಷಾನಿನ ಅರಸನಾದ ಓಗನೂ ಇದ್ದರು.
ಆತನು ಕಾನಾನ್ ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.
12ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು;ಆತನ ಪ್ರಜೆಗೆ ಅದು ಸ್ವಾಸ್ತ್ಯವಾಯಿತು.
13ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು;ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ.
14ನಿಜವಾಗಿ ಯೆಹೋವನು ತನ್ನ ಪ್ರಜೆಯ ನ್ಯಾಯವನ್ನು ಸ್ಥಾಪಿಸುವನು,ತನ್ನ ಸೇವಕರನ್ನು ಕನಿಕರಿಸುವನು.
15ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ;ಅವು ಮನುಷ್ಯರ ಕೈಕೆಲಸವಷ್ಟೇ.
16ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ,ಕಣ್ಣಿದ್ದರೂ ನೋಡುವುದಿಲ್ಲ,
17ಕಿವಿಯಿದ್ದರೂ ಕೇಳುವುದಿಲ್ಲ,ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ.
18ಅವುಗಳನ್ನು ಮಾಡುವವರು,ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ.
19ಇಸ್ರಾಯೇಲನ ಮನೆತನದವರೇ,ಯೆಹೋವನನ್ನು ಕೊಂಡಾಡಿರಿ;
ಆರೋನನ ಮನೆತನದವರೇ,
ಯೆಹೋವನನ್ನು ಕೊಂಡಾಡಿರಿ.
20ಲೇವಿಯ ಮನೆತನದವರೇ,ಯೆಹೋವನನ್ನು ಕೊಂಡಾಡಿರಿ;
ಯೆಹೋವನ ಭಕ್ತರೇ,
ಯೆಹೋವನನ್ನು ಕೊಂಡಾಡಿರಿ.
21ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ,ಕೀರ್ತಿ ಉಂಟಾಗಲಿ,
ಯೆಹೋವನಿಗೆ ಸ್ತೋತ್ರ!
136ಯೆಹೋವನ ಸ್ತುತಿ
(ಕೀರ್ತ. 135)
1ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ,ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.
2ದೇವಾಧಿದೇವನಿಗೆ ಕೃತಜ್ಞತಾಸ್ತುತಿ ಮಾಡಿರಿ,ಆತನ ಪ್ರೀತಿಯು ಶಾಶ್ವತವಾದದ್ದು.
3ಕರ್ತರ ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ,ಆತನ ಪ್ರೀತಿಯು ಶಾಶ್ವತವಾದದ್ದು.
4ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಆತನೊಬ್ಬನೇ ಶಕ್ತನು,ಆತನ ಪ್ರೀತಿಯು ಶಾಶ್ವತವಾದದ್ದು.
5ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ,ಆತನ ಪ್ರೀತಿಯು ಶಾಶ್ವತವಾದದ್ದು.
6ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ,ಆತನ ಪ್ರೀತಿಯು ಶಾಶ್ವತವಾದದ್ದು.
7ಆತನು ಮಹಾ ಜ್ಯೋತಿರ್ಮಂಡಲಗಳನ್ನು ಸೃಷ್ಟಿಸಿದ್ದಾನೆ,ಆತನ ಪ್ರೀತಿಯು ಶಾಶ್ವತವಾದದ್ದು.
8ಸೂರ್ಯನು ಹಗಲನ್ನು ಆಳುತ್ತಾನೆ,ಆತನ ಪ್ರೀತಿಯು ಶಾಶ್ವತವಾದದ್ದು.
9ಚಂದ್ರ, ನಕ್ಷತ್ರಗಳು ರಾತ್ರಿಯನ್ನು ಆಳುತ್ತವೆ,ಆತನ ಪ್ರೀತಿಯು ಶಾಶ್ವತವಾದದ್ದು.
10ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು,ಆತನ ಪ್ರೀತಿಯು ಶಾಶ್ವತವಾದದ್ದು.
11ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು,ಆತನ ಪ್ರೀತಿಯು ಶಾಶ್ವತವಾದದ್ದು.
12ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು,ಆತನ ಪ್ರೀತಿಯು ಶಾಶ್ವತವಾದದ್ದು.
13ಆತನು ಕೆಂಪು ಸಮುದ್ರವನ್ನು ವಿಭಾಗಿಸಿದನು,ಆತನ ಪ್ರೀತಿಯು ಶಾಶ್ವತವಾದದ್ದು.
14ಇಸ್ರಾಯೇಲರನ್ನು ಅದರ ಮಧ್ಯದಲ್ಲಿಯೇ ನಡೆಸಿದನು,ಆತನ ಪ್ರೀತಿಯು ಶಾಶ್ವತವಾದದ್ದು.
15ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿಬಿಟ್ಟನು,ಆತನ ಪ್ರೀತಿಯು ಶಾಶ್ವತವಾದದ್ದು.
16ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರೆತಂದನು,ಆತನ ಪ್ರೀತಿಯು ಶಾಶ್ವತವಾದದ್ದು.
17ದೊಡ್ಡ ಅರಸರನ್ನು ಹೊಡೆದನು,ಆತನ ಪ್ರೀತಿಯು ಶಾಶ್ವತವಾದದ್ದು.
18ಶ್ರೇಷ್ಠ ರಾಜರನ್ನು ಸಂಹರಿಸಿದನು,ಆತನ ಪ್ರೀತಿಯು ಶಾಶ್ವತವಾದದ್ದು.
19ಅಮೋರಿಯರ ಅರಸನಾದ ಸೀಹೋನನು ಅವರಲ್ಲೊಬ್ಬನು,ಆತನ ಪ್ರೀತಿಯು ಶಾಶ್ವತವಾದದ್ದು.
20ಬಾಷಾನಿನ ಅರಸನಾದ ಓಗನು ಇನ್ನೊಬ್ಬನು,ಆತನ ಪ್ರೀತಿಯು ಶಾಶ್ವತವಾದದ್ದು.
21ಅವರ ದೇಶವನ್ನು ಇಸ್ರಾಯೇಲರಿಗೆ ಸ್ವತ್ತಾಗಿ ಕೊಟ್ಟನು,ಆತನ ಪ್ರೀತಿಯು ಶಾಶ್ವತವಾದದ್ದು.
22ಆತನ ಸೇವಕರಾದ ಇಸ್ರಾಯೇಲರಿಗೆ ಅದು ಸ್ವಾಸ್ತ್ಯವಾಯಿತು,ಆತನ ಪ್ರೀತಿಯು ಶಾಶ್ವತವಾದದ್ದು.
23ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು,ಆತನ ಪ್ರೀತಿಯು ಶಾಶ್ವತವಾದದ್ದು.
24ನಮ್ಮ ಶತ್ರುಗಳಿಂದ ನಮ್ಮನ್ನು ಬಿಡಿಸಿದನು,ಆತನ ಪ್ರೀತಿಯು ಶಾಶ್ವತವಾದದ್ದು.
25ಎಲ್ಲಾ ಜೀವಿಗಳಿಗೂ ಆಹಾರ ಕೊಡುವವನು ಆತನೇ,ಆತನ ಪ್ರೀತಿಯು ಶಾಶ್ವತವಾದದ್ದು.
26ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ,ಆತನ ಪ್ರೀತಿಯು ಶಾಶ್ವತವಾದದ್ದು.
137ಸೆರೆಯವರ ಪ್ರಲಾಪ
(2 ಪೂರ್ವ. 36)
1ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು,ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು.
2ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು. 3ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ,<<ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ>> ಎಂದು ಹೇಳುತ್ತಿದ್ದರು.
4ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ? 5ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ.
6ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ,ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ,
ನನ್ನ ನಾಲಿಗೆಯು ಸೇದಿಹೋಗಲಿ.
7ಯೆಹೋವನೇ, ಎದೋಮ್ಯರ ಹಾನಿಗಾಗಿ,ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ.
ಅವರು, <<ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ>> ಎಂದು ಹೇಳಿದರಲ್ಲಾ.
8ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ,ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.
9ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ.
138ರಕ್ಷಣಾ ಕರ್ತನ ಸ್ತುತಿ
ದಾವೀದನ ಕೀರ್ತನೆ.
(ಕೀರ್ತ. 102:13-23)
1ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು;ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.
2ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ;ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ.
ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.
3ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ;ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.
4ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿನಿನ್ನನ್ನು ಸ್ತುತಿಸುವರು.
5ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು;ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.
6ಯೆಹೋವನು ಮಹೋನ್ನತನು;ಆದರೂ ದೀನರನ್ನು ಲಕ್ಷಿಸುತ್ತಾನೆ;
ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.
7ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ನನ್ನನ್ನು ಚೈತನ್ಯಗೊಳ್ಳಿಸುವಿ,
ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ,
ನಿನ್ನ ಬಲಗೈ ನನ್ನನ್ನು ರಕ್ಷಿಸುವುದು.
8ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು.ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು,
ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.
139ಸರ್ವಜ್ಞಾನಿ, ಸರ್ವವ್ಯಾಪಿ ಅದ ದೇವರು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
1ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ;
2ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ,ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.
3ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ,ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.
4ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ,ನೀನು ಅರಿಯದೆ ಇರುವಂಥದು ಒಂದೂ ಇಲ್ಲ.
5ಸುತ್ತಲೂ ನನ್ನನ್ನು ಆವರಿಸಿ, ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದಿ.
6ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ;ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.
7ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ?ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ?
8ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ,ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ.
9ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ,ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ,
10ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು;ನಿನ್ನ ಬಲಗೈ ನನ್ನನ್ನು ಹಿಡಿದಿರುವುದು.
11ಕಾರ್ಗತ್ತಲೆಯು ನನ್ನನ್ನು ಕವಿಯುವುದು,<<ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು>> ಎಂದು ಹೇಳಿಕೊಂಡರೇನು?
12ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ,ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ.
13ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ,ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
14ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ,ನಿನ್ನನ್ನು ಕೊಂಡಾಡುತ್ತೇನೆ.
ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು,
ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
15ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ,ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ,
ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.
16ನಾನು ಇನ್ನೂ ಕೇವಲ ಪಿಂಡವಾಗಿರುವಾಗ,ನಿನ್ನ ಕಣ್ಣುಗಳು ನನ್ನನ್ನು ನೋಡಿದವು,
ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ,
ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
17ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ,ಅವುಗಳು ಎಷ್ಟೋ ಅಸಂಖ್ಯವಾಗಿವೆ.
18ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ,ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ.
19ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ,ಎಷ್ಟೋ ಒಳ್ಳೆಯದು.
ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.
20ದೇವರೇ, ಅವರು ನಿನ್ನ ಶತ್ರುಗಳು,ಅಯೋಗ್ಯ ಕಾರ್ಯಕ್ಕಾಗಿ ನಿನ್ನ ಹೆಸರೆತ್ತುತ್ತಾರೆ, ಸುಳ್ಳಾಣೆಯಿಡುತ್ತಾರೆ.
21ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ?ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ?
22ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುತ್ತೇನೆ,ಅವರು ನನಗೂ ವೈರಿಗಳೇ ಆಗಿದ್ದಾರೆ.
23ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ,ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.
24ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ,ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು.
140ಶತ್ರುಪೀಡಿತನ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ.
(ಕೀರ್ತ. 7; 35; 64; 141—143)
1ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು,ಬಲಾತ್ಕಾರಿಗಳಿಂದ ತಪ್ಪಿಸಿ ಕಾಪಾಡು.
2ಅವರು ಕೇಡು ಕಲ್ಪಿಸುತ್ತಾರೆ,ಯಾವಾಗಲೂ ಜಗಳವೆಬ್ಬಿಸುತ್ತಾರೆ.
3ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ,ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ.
ಸೆಲಾ
4ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು,ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು.
ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ.
5ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ,
ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ,
ನನಗಾಗಿ ಬಲೆಬೀಸಿಟ್ಟಿದ್ದಾರೆ.
ಸೆಲಾ
6ನಾನು ಯೆಹೋವನಿಗೆ, <<ನೀನೇ ನನ್ನ ದೇವರು,ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು,
7ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ,
8ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ,ಅವರ ಆಶೆಗಳನ್ನು ನೆರವೇರಿಸಬೇಡ,
ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ>> ಎಂದು ಹೇಳುತ್ತೇನೆ.
ಸೆಲಾ
9ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡುಅವರ ತಲೆಯ ಮೇಲೆಯೇ ಬರಲಿ,
10ಅವರ ಮೇಲೆ ಕೆಂಡಗಳು ಸುರಿಯಲಿ,ಅವರು ಅಗ್ನಿಕುಂಡದೊಳಕ್ಕೂ,
ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ.
11ಚಾಡಿಗಾರನು ದೇಶದಲ್ಲಿ ಉಳಿಯನು,ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು.
12ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ,ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.
13ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು,ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು.
141ಬಲಾತ್ಕಾರ ದುಷ್ಪ್ರೇರಣೆಗಳಿಂದ ತಪ್ಪಿಸಬೇಕೆಂಬ ಪ್ರಾರ್ಥನೆ
ದಾವೀದನ ಕೀರ್ತನೆ.
(ಕೀರ್ತ. 140)
1ಯೆಹೋವನೇ, ಮೊರೆಯಿಡುತ್ತೇನೆ,ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು.
2ನನ್ನ ಪ್ರಾರ್ಥನೆಯು ಧೂಪದಂತೆಯೂ,ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.
3ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು,ನನ್ನ ತುಟಿಗಳೆಂಬ ಕದವನ್ನು ಕಾಯಿ.
4ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ,ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು.
ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.
5ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ,ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ,
ನನ್ನ ತಲೆಯು ಅದನ್ನು ಬೇಡವೆನ್ನದಿರಲಿ.
ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.
6ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ,ಜನರು ನನ್ನ ಮಾತುಗಳಿಗೆ ಕಿವಿಗೊಡುವರು,
ಅವು ಅವರಿಗೆ ಹಿತವಾಗಿರುವವು.
7ಒಬ್ಬನು ಹೊಲವನ್ನು ಉಳುತ್ತಾ,ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ,
ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ.
8ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ,ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ,
ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ.
9ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು,ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು.
10ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ,ಆಗ ನಾನು ತಪ್ಪಿಸಿಕೊಳ್ಳುವೆನು.
142ಇಕ್ಕಟ್ಟಿನಲ್ಲಿದ್ದವನ ಪ್ರಾರ್ಥನೆ
ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ.
(ಕೀರ್ತ. 140; 1 ಸಮು. 22; 24)
1ನಾನು ಯೆಹೋವನಿಗೆ ಮೊರೆಯಿಡುವೆನು,ಯೆಹೋವನಿಗೆ ಕೂಗಿ ಬಿನ್ನೈಸುವೆನು.
2ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು,ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು.
3ನನ್ನ ಆತ್ಮವು ಕುಂದಿಹೋದಾಗ,ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ,
ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ.
4ನಾನು ನನ್ನ ಬಲಗಡೆಗೆ ನೋಡಲು,ಅಲ್ಲಿ ಸಹಾಯಕರು ಯಾರೂ ಇಲ್ಲ,
ಆಶ್ರಯವೂ ನಾಶವಾಯಿತು,
ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.
5ಯೆಹೋವನೇ, ನಾನು ನಿನಗೆ, <<ನೀನೇ ನನ್ನ ಶರಣನೂ,ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ>> ಎಂದು ಕೂಗಿ ಮೊರೆಯಿಟ್ಟಿದ್ದೇನೆ.
6ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ.ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು,
ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.
7ಸೆರೆಯಿಂದ ನನ್ನನ್ನು ಬಿಡಿಸು,ನಿನ್ನ ನಾಮವನ್ನು ಕೀರ್ತಿಸುವೆನು.
ನೀತಿವಂತರು ನಿನ್ನ ಮಹೋಪಕಾರಕ್ಕಾಗಿ,
ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು.
143ಶಿಕ್ಷಾರಕ್ಷಣೆಗಳಿಗಾಗಿ ಪ್ರಾರ್ಥನೆ
ದಾವೀದನ ಕೀರ್ತನೆ.
(ಕೀರ್ತ. 140)
1ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು;ನನ್ನ ಬಿನ್ನಹಕ್ಕೆ ಕಿವಿಗೊಡು;
ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು.
2ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ;ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.
3ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ;ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ.
ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ;
ಬಹು ಕಾಲದಿಂದ ಸತ್ತವರಂತಿದ್ದೇನೆ.
4ನನ್ನ ಆತ್ಮವು ಕುಂದಿಹೋಗಿದೆ;ನನ್ನ ಮನಸ್ಸು ಬೆರಗಾಗಿದೆ.
5ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ;ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ;
ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ;
6ಕೈಚಾಚಿ ಬೇಡುತ್ತೇನೆ;ಒಣನೆಲವು ನೀರಿಗಾಗಿ ಹೇಗೋ,
ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ.
ಸೆಲಾ
7ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು;ನನ್ನ ಆತ್ಮವು ಕುಂದಿಹೋಗಿದೆ.
ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.
8ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ;ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ.
ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು;
ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
9ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ;ಶತ್ರುಗಳಿಂದ ನನ್ನನ್ನು ಬಿಡಿಸು.
10ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು,ನನ್ನ ದೇವರು ನೀನಲ್ಲವೋ?
ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.
11ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು;ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.
12ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು.ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು;
ನಾನು ನಿನ್ನ ಸೇವಕನಲ್ಲವೇ.
144ಜಯದ ಗೀತೆ, ಸೌಭಾಗ್ಯದ ನಿರೀಕ್ಷೆ
ದಾವೀದನ ಕೀರ್ತನೆ.
(ಕೀರ್ತ. 18; ಧರ್ಮೋ. 33:26-29)
1ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ.ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು,
ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.
2ನನ್ನ ಪ್ರೀತಿಯು, ನನ್ನ ಕೋಟೆಯು, ನನ್ನ ದುರ್ಗವು,ನನ್ನ ರಕ್ಷಕನು, ನನ್ನ ಗುರಾಣಿಯು, ಆಶ್ರಯವು,
ಜನಾಂಗಗಳನ್ನು ನನಗೆ ಅಧೀನಮಾಡಿದವನೂ ಆತನೇ.
3ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು?ಅವನನ್ನು ನೀನು ಏಕೆ ನೆನಸಬೇಕು?
ಮಾನವನು ಎಷ್ಟರವನು?
ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
4ಮನುಷ್ಯನು ಬರೀ ಉಸಿರೇ,ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.
5ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ,ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು.
6ಸಿಡಿಲಿನಿಂದ ಶತ್ರುಗಳನ್ನು ಚದರಿಸಿಬಿಡು,ನಿನ್ನ ಬಾಣಗಳಿಂದ ಅವರನ್ನು ಭ್ರಾಂತಿಗೊಳಿಸು.
7ಮೇಲಣ ಲೋಕದಿಂದ ಕೈಚಾಚಿ,ಮಹಾ ಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ.
8ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆಯಿಡುವವರೂಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸು.
9ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು,ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
10ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನುಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.
11ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.
12ಯೌವನಸ್ಥರಾದ ನಮ್ಮ ಗಂಡುಮಕ್ಕಳುಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು,
ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು.
13ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು,ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.
14ನಮ್ಮ ಪಶುಗಳು ಅಸಂಖ್ಯಾತವಾಗಲಿ,ವೈರಿಗಳು ಒಳಗೆ ನುಗ್ಗುವುದಾಗಲಿ,
ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ,
ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ.
15ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು,ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.
145ಯೆಹೋವನ ಕೃಪೆ ಪ್ರಭಾವಗಳಿಗಾಗಿ ಕೊಂಡಾಟ
ದಾವೀದನ ಕೀರ್ತನೆ.
1ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು,ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.
2ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು,ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು.
3ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ,ಆತನ ಮಹತ್ತು ಅಪಾರವಾದದ್ದು.
4ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು,ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.
5 ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು,ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.
6ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು.ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.
7ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು,ನಿನ್ನ ನೀತಿಯನ್ನು ಹೊಗಳುವರು.
8ಯೆಹೋವನು ದಯೆಯು, ಕನಿಕರವು ಉಳ್ಳವನು,ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.
9ಯೆಹೋವನು ಸರ್ವೋಪಕಾರಿಯು,ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.
10ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು,ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.
11ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು,ನಿನ್ನ ಪ್ರತಾಪವನ್ನು ವರ್ಣಿಸುವರು.
12ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ,ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
13 ನಿನ್ನ ರಾಜ್ಯವು ಶಾಶ್ವತವಾಗಿದೆ,ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.
14ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ,ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.
15ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ,ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ.
16ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ. 17ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು,ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.
18ಯೆಹೋವನಿಗೆ ಮೊರೆಯಿಡುವವರು,ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
19ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ,ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.
20ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ,ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.
21ನನ್ನ ಬಾಯಿ ಯೆಹೋವನನ್ನು ಕೀರ್ತಿಸುವುದು,ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು
ಯುಗಯುಗಾಂತರಗಳಲ್ಲಿಯೂ ಕೊಂಡಾಡಲಿ.
146ಯೆಹೋವನನ್ನು ಆಶ್ರಯಿಸಿಕೊಂಡವನು ಧನ್ಯನು
1ಯೆಹೋವನಿಗೆ ಸ್ತೋತ್ರ!ನನ್ನ ಮನವೇ, ಯೆಹೋವನನ್ನು ಸ್ತುತಿಸು.
2ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು,ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.
3ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ,ಅವರು ಸಹಾಯ ಮಾಡ ಶಕ್ತರಲ್ಲ,
4ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ,ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು.
5ಯಾರಿಗೆ ಯಾಕೋಬನ ದೇವರು ಸಹಾಯಕನೋ,ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ,
ಅವನೇ ಧನ್ಯನು.
6ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ,ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,
7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ,ಹಸಿದವರಿಗೆ ಆಹಾರ ಕೊಡುವವನೂ ಆತನೇ.
ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.
8ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ.ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ.
ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.
9ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ.ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ.
ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.
10ಯೆಹೋವನು ಸದಾಕಾಲವೂ ಅರಸನಾಗಿರುವನು,ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು,
ಯೆಹೋವನಿಗೆ ಸ್ತೋತ್ರ!
147ಸ್ವಪ್ರಜಾರಕ್ಷಕನಾಗಿರುವ ಸೃಷ್ಟಿಪಾಲಕನಿಗೆ ಸ್ತೋತ್ರ
(ಕೀರ್ತ. 33)
1ಯೆಹೋವನಿಗೆ ಸ್ತೋತ್ರ!ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದೂ, ಸಂತೋಷಕರವೂ ಆಗಿದೆ,
ಆತನನ್ನು ಕೀರ್ತಿಸುವುದು ಯುಕ್ತವಾಗಿದೆ.
2ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ,ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ,
3ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ,ಅವರ ಗಾಯಗಳನ್ನು ಕಟ್ಟುತ್ತಾನೆ.
4ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ,ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ.
5ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ,ಆತನ ಜ್ಞಾನವು ಅಪರಿಮಿತವಾಗಿದೆ.
6ಯೆಹೋವನು ದೀನರಿಗೆ ಆಧಾರವಾಗಿದ್ದಾನೆ,ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.
7ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ,ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ.
8ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ,ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ,
ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
9ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂಬೇಕಾದ ಆಹಾರಕೊಡುತ್ತಾನೆ.
10ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ,ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ.
11ಯೆಹೋವನು ಆನಂದಿಸುವುದುತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.
12ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು,ಚೀಯೋನೇ, ನಿನ್ನ ದೇವರನ್ನು ಸ್ತುತಿಸು.
13ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ,ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.
14ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ,ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.
15ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ,ಆತನ ವಾಕ್ಯವು ಬಹು ವೇಗಶಾಲಿಯಾಗಿದೆ.
16ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ,ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ.
17ರೊಟ್ಟಿ ತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ,ಆತನು ಚಳಿಯನ್ನು ಬರಮಾಡಲು ಅದನ್ನು ಸಹಿಸುವವರು ಯಾರು?
18ಆತನು ಅಪ್ಪಣೆಕೊಡಲು ಅವು ಕರಗುತ್ತವೆ,ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.
19ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ,ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.
20ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ,ಆತನ ನ್ಯಾಯವಿಧಿಗಳನ್ನು ಅವರು ಅರಿಯರು.
ಯೆಹೋವನಿಗೆ ಸ್ತೋತ್ರ!
148ಭೂಮ್ಯಾಕಾಶಗಳು ಯೆಹೋವನನ್ನು ಕೊಂಡಾಡಲಿ
1ಯೆಹೋವನಿಗೆ ಸ್ತೋತ್ರ!ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ,
ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ.
2ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ,ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ.
3ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ,ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.
4ಉನ್ನತೋನ್ನತವಾದ ಆಕಾಶವೇ,ಅದರ ಮೇಲಿರುವ ಜಲರಾಶಿಗಳೇ,
ಆತನನ್ನು ಸ್ತುತಿಸಿರಿ.
5ಅವು ಯೆಹೋವನ ನಾಮವನ್ನು ಸ್ತುತಿಸಲಿ,ಆತನು ಅಪ್ಪಣೆಕೊಡಲು ಅವು ಉಂಟಾದವು.
6ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ,ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.
7ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ.ತಿಮಿಂಗಿಲಗಳು, ಆದಿಸಾಗರಗಳು
8ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು,ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು,
9ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು,ಎಲ್ಲಾ ತುರಾಯಿ ಮರಗಳು,
10ಎಲ್ಲಾ ಮೃಗ, ಪಶು, ಪಕ್ಷಿ, ಕ್ರಿಮಿಕೀಟಗಳು, 11ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು,
12ಪ್ರಾಯಸ್ಥರಾದ ಸ್ತ್ರೀಪುರುಷರು, ಮುದುಕರು, ಹುಡುಗರು 13ಯೆಹೋವನನ್ನು ಕೊಂಡಾಡಲಿ.ಆತನ ನಾಮವೊಂದೇ ಮಹತ್ವವುಳ್ಳದ್ದು,
ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.
14ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ.ಆದುದರಿಂದ ಆತನ ಎಲ್ಲಾ ಭಕ್ತರು,
ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ.
ಯೆಹೋವನಿಗೆ ಸ್ತೋತ್ರ!
149ಜಯಗೀತೆ
(ಪ್ರಕ. 19)
1ಯೆಹೋವನಿಗೆ ಸ್ತೋತ್ರ!ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ;
ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.
2ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ;ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.
3ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ;ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.
4ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು;ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.
5ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ;ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.
6ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ,ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.
7ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು;ಅನ್ಯಜನಗಳನ್ನು ದಂಡಿಸುವರು;
8ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು;ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.
9ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು;ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು.
ಯೆಹೋವನಿಗೆ ಸ್ತೋತ್ರ.
150ಸಮಾಪ್ತಿಯ ಕೀರ್ತನೆ
1ಯೆಹೋವನಿಗೆ ಸ್ತೋತ್ರ!ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ;
ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.
2ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ;ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ.
3ಕೊಂಬೂದುತ್ತಾ ಆತನನ್ನು ಸ್ತುತಿಸಿರಿ;ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.
4ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ;ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.
5ತಾಳದಿಂದ ಆತನನ್ನು ಸ್ತುತಿಸಿರಿ;ಝಲ್ಲರಿಯಿಂದ ಆತನನ್ನು ಸ್ತುತಿಸಿರಿ.
6ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ;ಯೆಹೋವನಿಗೆ ಸ್ತೋತ್ರ!
ಯೆಶಾಯನು
11ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.ದೈವದ್ರೋಹಿಯಾದ ಜನಾಂಗ
2ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ.ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.
3ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು.ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.
4ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ,ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ.
ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ.
ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
5ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ?ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
6ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ,ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ.
ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.
7ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ.ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ.
ಅದು ಅನ್ಯಜನರಿಂದ ಹಾಳಾಯಿತು.
8ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ,ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.
9ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ,ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
10ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ.ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.
11ಯೆಹೋವನು ಹೀಗೆನ್ನುತ್ತಾನೆ, <<ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ?ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು.
ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
12ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ;ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು?
13ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ;ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
14ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ;ಇವು ನನಗೆ ಭಾರ; ಸಹಿಸಲು ಬೇಸರ.
15ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು.ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ.
ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
16ನಿಮ್ಮನ್ನು ತೊಳೆದು ಶುದ್ಧರಾಗಿ,ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ,
ದುರಾಚಾರವನ್ನು ಬಿಡಿ,
17ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ.ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ.
ಅನಾಥನಿಗೆ ನ್ಯಾಯತೀರಿಸಿರಿ.
ವಿಧವೆಯ ಪಕ್ಷವಾಗಿ ವಾದಿಸಿರಿ.>>
18<<ಬನ್ನಿರಿ ವಾದಿಸುವ>> ಎಂದು ಯೆಹೋವನು ಅನ್ನುತ್ತಾನೆ.<<ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು.
ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
19ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.
20ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ>>ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.
ಅಪನಂಬಿಗಸ್ತ ಯೆರೂಸಲೇಮ್
21ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ!ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ
ಈಗ ಕೊಲೆಪಾತಕರಿಗೆ ನೆಲೆಯಾಗಿದೆ.
22ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು. 23ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ;ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು;
ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.
24ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ,<<ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.
25ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ,ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.
26ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು.ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.>>
27ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.
28ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು. 29<<ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ.ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
30ಎಲೆ ಒಣಗಿದ ಏಲಾ ಮರದಂತೆಯೂ,ನೀರಿಲ್ಲದ ವನದ ಹಾಗೂ ಇರುವಿರಿ.
31ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ,ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.>>
2ಚೀಯೋನಿನ ಮುಂದಣ ಪ್ರಖ್ಯಾತಿ
1ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ.
2ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವುಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು.
ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
3ಹೊರಟು ಬಂದ ಬಹು ಜನಾಂಗದವರು,<<ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ,
ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು>> ಎಂದು ಹೇಳುವರು.
ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.
4ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು;ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು.
ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
ಯೆಹೋವನ ನ್ಯಾಯನಿರ್ಣಯದ ದಿನ
5ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ.
6ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ,ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ,
ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.
7ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ.ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ.
8ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ.ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.
9ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ.
10ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ,ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ.
11ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು.ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
12ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವುಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.
13ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ,
14ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳ ಮೇಲೆಯೂ,
15ಎತ್ತರವಾದ ಸಕಲ ಗೋಪುರಗಳ ಮೇಲೆಯೂ, ಭದ್ರವಾದ ಸಮಸ್ತ ಕೋಟೆಗಳ ಮೇಲೆಯೂ,
16ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೇ ಬರುವುದು. 17ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು.ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.
18ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು.
19ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ,ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು.
20ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ,ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.
21ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ,ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು.
22ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ.ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ.
3ಯೆಹೂದದ ಕುರಿತಾದ ನ್ಯಾಯತೀರ್ಪು
1ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.
2ಇದಲ್ಲದೆ ಶೂರ, ಯುದ್ಧಭಟರು, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ,
3ಪಂಚಾಶತಾಧಿಪತಿ, ಘನವಂತನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರೆಲ್ಲರನ್ನು ತೊಲಗಿಸಿಬಿಡುವೆನು. 4ನಾನು, <<ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇಮಿಸುವೆನು, ಬಾಲಕರು ಅದನ್ನು ಆಳುವರು.
5ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು,ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು.
6ಆ ದಿನದಲ್ಲಿ ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು,<ನಿನಗೆ ನಿಲುವಂಗಿ ಇದೆ. ನೀನು ನಮಗೆ ಒಡೆಯನಾಗಬೇಕು. ಹಾಳಾದ ಈ ಪಟ್ಟಣವು ನಿನ್ನ ಕೈಕೆಳಗಿರಲಿ ತಂದೆಯ ಮನೆಯೊಳಗೆ ಅಣ್ಣನನ್ನು ಬಲವಂತ ಮಾಡಲು ಅಣ್ಣನು ದೇಶದ ನಿರರ್ಥಕ ವ್ರಣವೈದ್ಯನಾಗುವುದಕ್ಕೆ ನನಗೆ ಇಷ್ಟವಿಲ್ಲ> ಎಂದು ನಿರಾಕರಿಸುವನು.
7ಆ ದಿನದಲ್ಲಿ ಅವನು ಗಟ್ಟಿಯಾಗಿ ಕೂಗುತ್ತಾ,<ನಾನು ನಿಮ್ಮನ್ನು ಸ್ವಸ್ಥಪಡಿಸುವುದಿಲ್ಲ. ನನ್ನ ಮನೆಯಲ್ಲಿ ಅನ್ನವಾಗಲೀ, ವಸ್ತ್ರವಾಗಲೀ ಇಲ್ಲ:
ಜನರನ್ನು ಆಳುವ ಒಡೆಯನನ್ನಾಗಿ ನನ್ನನ್ನು ಮಾಡಬೇಡಿರಿ> >> ಎಂದು ಹೇಳುವನು.
8ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು.ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?
9ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ.ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.
10ನೀವು ನೀತಿವಂತರಿಗೆ, <<ನಿಮಗೆ ಒಳ್ಳೆಯದಾಗಲಿ>> ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.
11ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.
12ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು.ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.
13ಯೆಹೋವನು ವಾದಿಸುವುದಕ್ಕೂ, ಜನರಿಗೆ ನ್ಯಾಯತೀರಿಸುವುದಕ್ಕೂ ಎದ್ದು ನಿಂತಿದ್ದಾನೆ.
14ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು.ಏಕೆಂದರೆ, <<ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
15ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?>>ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.
ಯೆರೂಸಲೇಮಿನವರಿಗಾಗುವ ದಂಡನೆಯೂ
16ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ,ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ,
ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ,
17ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು. 18ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ,
19ಜುಮುಕಿ, ಬಳೆ, ಶಿರವಸ್ತ್ರ,
20ಮುಂಡಾಸು, ಕಾಲಗೆಜ್ಜೆ, ಡಾಬು, ಗಂಧದ ಭರಣಿ, ತೋಳಬಂಧಿ, 21ಮುದ್ರೆ ಉಂಗುರ, ಮೂಗುತಿ,
22ಹಬ್ಬದ ಉಡುಗೆ-ತೊಡುಗೆ, ಮೇಲಂಗಿ, ಶಾಲು, ಕೈಚೀಲ,
23ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ಹೊದಿಕೆ ಈ ಸೊಗಸಾದ ಭೂಷಣಗಳನ್ನೆಲ್ಲಾ ತೆಗೆದುಹಾಕುವನು. 24ಆಗ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ,ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು,
ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು.
25ಚೀಯೋನ್ ನಗರಿಯೇ, ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು. ನಿನ್ನ ಶೌರ್ಯವು ಯುದ್ಧದಲ್ಲಿ ಅಡಗಿ ಹೋಗುವುದು.
26ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು. 41ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು,<<ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು,
ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು>> ಎಂದು ಕೇಳಿಕೊಳ್ಳುವರು.
ಚೀಯೋನಿನ ಮುಂದಿನ ಸುಸ್ಥಿತಿ
2ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.3ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.4ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಮತ್ತು ಯೆರೂಸಲೇಮಿನ ರಕ್ತದ ಕಲೆಯನ್ನು ತೊಳೆದುಬಿಡುವನು.5ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.6ಅದು ಹಗಲಿನ ಬಿಸಿಲಿನಲ್ಲಿ ನೆರಳನ್ನೂ, ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಗುಡಾರವಾಗಿರುವುದು. 5ಯೆಹೋವನ ದ್ರಾಕ್ಷಿಯ ತೋಟದ ಗೀತೆ
1ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತುಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.
2ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು,ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ,
ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.
3ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ,ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ.
4ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು?ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?
5ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ.ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.
6ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು.ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.
7ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ,ಯೆಹೂದದ ಜನವೇ, ಆತನ ಇಷ್ಟದ ಗಿಡ.
ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.
ಬರಲಿರುವ ಅಪತ್ತು
8ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು,ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!
9ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ,ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು.
10ಏಕೆಂದರೆ ಹತ್ತು ಎಕರೆ ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ ಬೀಜದಿಂದ ಕಡಿಮೆ ದವಸವು ಬರುವುದು. 11ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು,ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!
12ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು.ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.
13ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ.ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.
14ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು,ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು.
15ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
16ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.
17ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು. 18ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ,
19ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ.ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!
20ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ;ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು,
ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!
21ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!. 22ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;
23ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ! 24ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ,ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ,
ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
25ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು.ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು.
ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.
26ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು.ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ.
27ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ.ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ.
28ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ.ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.
29ಅವರು ಸಿಂಹದಂತೆ ಘರ್ಜಿಸುತ್ತಾರೆ. ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ.ಗುರುಗುಟ್ಟುತ್ತಾ ಬೇಟೆ ಹಿಡಿದು ಹೊತ್ತುಕೊಂಡು ಹೋಗುತ್ತಾರೆ. ರಕ್ಷಿಸುವವರು ಯಾರೂ ಇಲ್ಲ.
30ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು.ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು.
6ಯೆಶಾಯನಿಗೆ ಯೆಹೋವನ ಕರೆ
1ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.2ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.3ಆಗ ಒಬ್ಬನು ಮತ್ತೊಬ್ಬನಿಗೆ,<<ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ>> ಎಂದು ಕೂಗಿ ಹೇಳಿದನು.
4ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು.5ಆಗ ನಾನು,<<ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು.
ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು.
ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!>> ಎಂದು ಕೂಗಿಕೊಳ್ಳಲು,
6ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,7ನನ್ನ ಬಾಯಿಗೆ ಮುಟ್ಟಿಸಿ,<<ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು>> ಎಂದನು.
8ಆಗ, <<ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?>> ಎಂಬ ಕರ್ತನ ನುಡಿಯನ್ನು ಕೇಳಿ, <<ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು>> ಎಂದೆನು.
9ಅದಕ್ಕೆ ಆತನು, <<ನೀನು ಈ ಜನರ ಬಳಿಗೆ ಹೋಗಿ,ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,
10ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ,ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ>> ಎಂದು ನನಗೆ ಹೇಳಿದನು.
11ಅದಕ್ಕೆ ನಾನು, <<ಕರ್ತನೇ, ಇದು ಎಷ್ಟರವರೆಗೆ?>> ಎಂದು ಕೇಳಲು ಅದಕ್ಕೆ ಆತನು,<<ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ,
ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.
12ಯೆಹೋವನು ಮನುಷ್ಯರನ್ನು ದೂರಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗೆ ಇರುವುದು. 13ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು.ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ,
ಉಳಿಯುವುದು ಬುಡ ಮಾತ್ರ>> ಎಂದು ಉತ್ತರಕೊಟ್ಟನು.
7ಆಹಾಜನಿಗೆ ಯೆಶಾಯನ ಬೋಧನೆ
1ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನಾದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲರ ಅರಸನಾದ ಪೆಕಹ ಎಂಬುವವರು ಯೆರೂಸಲೇಮಿನ ಮೇಲೆ ದಂಡೆತ್ತಿ ಬಂದರು. ಆದರೆ ಅದನ್ನು ಜಯಿಸುವುದಕ್ಕೆ ಸಾಧ್ಯವಾಗಲಿಲ್ಲ.2ಅರಾಮ್ಯರು ಎಫ್ರಾಯೀಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.3ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, <<ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,4<ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.> >>5ಅರಾಮ್ಯರೂ, ಎಫ್ರಾಯೀಮ್ಯರೂ ಮತ್ತು ರೆಮಲ್ಯನ ಮಗನೂ ನಿನ್ನ ವಿಷಯವಾಗಿ ದುರಾಲೋಚನೆ ಮಾಡಿ,6<<ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ>> ಎಂದುಕೊಂಡಿದ್ದಾರೆ.
7ಕರ್ತನಾದ ಯೆಹೋವನು ಹೇಳುವುದೇನೆಂದರೆ, <<ಇದು ನೆರವೇರುವುದಿಲ್ಲ; ಇದು ಆಗುವುದೇ ಇಲ್ಲ.
8ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ.ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.
9ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ.ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ>> ಎಂಬುದೇ.
ಇಮ್ಮಾನುವೇಲನ ಮುಂಗುರುತು
10ಮತ್ತೆ ಯೆಹೋವನು ಆಹಾಜನಿಗೆ,11<<ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ>> ಎಂದು ಹೇಳಿದನು.12ಆಗ ಆಹಾಜನು, <<ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ>> ಎಂದನು.13ಅದಕ್ಕೆ ಯೆಶಾಯನು ಹೀಗೆ ಹೇಳಿದನು, <<ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?14ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.15ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು.16<<ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.17ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.>>18ಆ ಕಾಲದಲ್ಲಿಐಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ,
ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಳ್ಳುಹಾಕುವನು.
19ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ,ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.
20ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು.
21ಆ ಕಾಲದಲ್ಲಿ ಮನುಷ್ಯನು ಒಂದು ಹಸುವಿನ ಕರುವನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
22ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು.ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು.
23ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ,ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.
24ದೇಶವೆಲ್ಲಾ ಮುಳ್ಳು ಮತ್ತು ದತ್ತೂರಿಗಳ ಪೊದೆಯಾಗಿರುವುದಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.
25ಗುದ್ದಲಿಯಿಂದ ಅಗೆಯುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೇ ಇರುವಿ.ಆದರೆ ಅದು ದನಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.
8ಅಶ್ಶೂರದ ಆಕ್ರಮಣದ ಕುರಿತು ಮುನ್ನೆಚ್ಚರಿಕೆ
1ಆ ಮೇಲೆ ಯೆಹೋವನು ನನಗೆ, <<ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, <ಮಹೇರ್ ಶಾಲಾಲ್ ಹಾಷ್ ಬಜ್ > ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ.2ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು>> ಎಂದು ಹೇಳಿದನು.3ಅನಂತರ, <<ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ <ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು> ಎಂದು ಹೇಳಿದನು.4ಆ ಮಗುವು, <ಅಪ್ಪಾ, ಅಮ್ಮಾ> ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು>> ಎಂದು ಹೇಳಿದನು.5ಯೆಹೋವನು ಮತ್ತೊಂದಾವರ್ತಿ ನನಗೆ ಹೀಗೆ ನುಡಿದನು,
6<<ಈ ಜನರು ನಿಧಾನವಾಗಿ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ,ರೆಮಲ್ಯನ ಮಗನನ್ನೂ ನಂಬಿ ಮೆರೆದಿದ್ದರಿಂದ,
7ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು.ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,
8ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು.ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.>>
9ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ;ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.
10ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ.ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.
ದೇವರಿಗೆ ಭಯಪಡಿರಿ
11ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು, ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗೆಂದನು,12<<ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ;ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.
13ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ. 14ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ,ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು.
15ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗಪಡುವರು, ಬಲೆಗೆ ಸಿಕ್ಕಿ ವಶವಾಗುವರು.>> 16 ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.17ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.
18ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.
19<<ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ>> ಎಂದು ಒಂದು ವೇಳೆ ನಿಮಗೆ ಹೇಳಾರು, <<ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?20ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ>> ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.21ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡುತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.
22ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ,ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.
9ನಮಗಾಗಿ ಒಂದು ಮಗುವು ಹುಟ್ಟಿತು
1ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ.ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು,
ಆತನು ಅವಮಾನಕ್ಕೆ ಗುರಿಮಾಡಿದನು.
ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ.
2ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು.ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.
3ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ.ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ,
ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.
4ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ,ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.
5ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ,ರಕ್ತದಲ್ಲಿ ಅದ್ದಿದ ಉಡುಪುಗಳೂ,
ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.
6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು;
ಅದ್ಭುತ ಸ್ವರೂಪನು, ಆಲೋಚನಾ ಕರ್ತನು,
ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ,
ಸಮಾಧಾನದ ಪ್ರಭು ಎಂಬುದು ಆತನ ಹೆಸರು.
7ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು.ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ
ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು.
ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
ಇಸ್ರಾಯೇಲರ ವಿರುದ್ಧ ಯೆಹೋವನ ಕೋಪ
8ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು.
9ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್ಯರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ,
10<<ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು>> ಎಂಬುದೇ. 11ಆದುದರಿಂದ ಯೆಹೋವನು ರೆಚೀನಿನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ.
12ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು.ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
13ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.
14ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.
15ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು. 16ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.
17ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ.ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ.
ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
18ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ,ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.
19ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ.ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.
20ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ.ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.
21ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ.ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
101ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.
2ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ,ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.
3ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ?ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?
4ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ.ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
ಯೆಹೋವನು ಅಶ್ಶೂರದಿಂದ ತನ್ನ ಜನರನ್ನು ದಂಡಿಸುವುದು
5ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
6ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ,ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.
7ಅವನ ಅಭಿಪ್ರಾಯವೋ, ಹಾಗಲ್ಲ.ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆನೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ.
8ಅವನು ಹೇಳುವುದೇನೆಂದರೆ, <<ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?
9ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ?ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?
10ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ,
11ಸಮಾರ್ಯವನ್ನೂ, ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟ ಹಾಗೆ,ಯೆರೂಸಲೇಮನ್ನೂ ಅದರ ವಿಗ್ರಹಗಳನ್ನೂ ಕೆಡವಲಾರೆನೋ?>> ಎಂಬುದೇ.
12ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, <<ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.>>13ಏಕೆಂದರೆ ಅವನು ತನ್ನೊಳಗೆ,<<ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ.
ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು,
ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
14ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ.ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ.
ರೆಕ್ಕೆಯಾಡಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ>> ಎಂದು ಅಂದುಕೊಂಡನು.
15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ?ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.
16ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು.ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.
17ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು.ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.
18ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು.ದೇಶವೋ ರೋಗಿಯಂತೆ ನಾಶವಾಗುವುದು.
19ಅದರ ವನವೃಕ್ಷಗಳ ಸಂಖ್ಯೆಯು ಒಂದು ಚಿಕ್ಕಮಗುವೂ ಸಹ ಎಣಿಸಿ ಬರೆಯುವಷ್ಟು ಕಡಿಮೆಯಾಗುವುದು.ಅಳಿದುಳಿದ ಇಸ್ರಾಯೇಲರು
20ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.21ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.22ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.23ಏಕೆಂದರೆ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಯಿಸಲ್ಪಟ್ಟ ನಾಶನವನ್ನು ಉಂಟುಮಾಡುವನು.24ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, <<ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.25ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.>>26ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.27ಆ ದಿನದಲ್ಲಿ,ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು,
ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.
28ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ,ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.
29ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ.ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.
30ಗಲ್ಲೀಮ್ ಗ್ರಾಮವೇ, ಕೂಗಿ ಅರಚಿಕೋ! ಲಯೆಷವೇ,ಕಿವಿಗೊಡು! ಅನಾತೋತೇ, ಪ್ರತಿಧ್ವನಿ ಕೊಡು!
31ಮದ್ಮೇನ ದಿಕ್ಕಾಪಾಲಾಯಿತು.ಗೇಬೀಮಿನ ನಿವಾಸಿಗಳು ವಲಸೆ ಹೋದರು.
32ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು.ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.
33ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು.ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.
34ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಕೊಡಲಿಯಿಂದ ಕಡಿದುಬಿಡುವನು. ಲೆಬನೋನಿನ ವನವು ಬಲಿಷ್ಠನಾದವನ ಮುಂದೆ ಬಿದ್ದುಹೋಗುವುದು.
11ಇಷಯನ ಬೇರಿನಿಂದ ಕೊಂಬೆ
1ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.2ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ,ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.
3ಆತನು ಯೆಹೋವನ ಭಯದಲ್ಲಿ ಆನಂದಿಸುವನು.ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ.
4ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು.ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.
5ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ. 6ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆಮರಿಯೊಂದಿಗೆ ಮಲಗುವುದು.ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವವು; ಇವುಗಳನ್ನು ಚಿಕ್ಕ ಮಗುವು ನಡೆಸುವುದು.
7ಹಸುವು ಕರಡಿಯ ಸಂಗಡ ಮೇಯುವುದು; ಅವುಗಳ ಮರಿಗಳು ಜೊತೆಯಾಗಿ ಮಲಗುವವು.ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು.
8ಮೊಲೆಕೂಸು ನಾಗರ ಹಾವಿನ ಹುತ್ತದ ಮೇಲೆ ಆಡುವುದು;ಮೊಲೆಬಿಟ್ಟ ಮಗುವು ಹಾವಿನ ಬಿಲದ ಒಳಗೆ ಕೈಹಾಕುವುದು.
9ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ;ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.
10ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು;ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನುಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ,
ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
12ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ,ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.
13ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು.ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.
14ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು.ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.
15ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ,ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.
16ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ,ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು.
12ಯೆಹೋವನ ಸ್ತೋತ್ರಗೀತೆಗಳು
1ಆ ದಿನದಲ್ಲಿ ನೀನು ಹೇಳುವುದೇನೆಂದರೆ,<<ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.
2ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು;ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.>>
3ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.
4ಆ ದಿನದಲ್ಲಿ ನೀವು ಹೇಳುವುದೇನೆಂದರೆ, <<ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ,ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.
5ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.
6ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ>> ಎಂಬುದೇ. 13ಬಾಬೆಲಿನ ವಿಷಯವಾದ ದೈವೋಕ್ತಿ
1ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.
2ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ,ಅವರನ್ನು ಕೈಬೀಸಿ ಕರೆಯಿರಿ.
3ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ.ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ.
4ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ!ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ!
ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ.
5ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ,ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ.
6ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.
7ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು.
8ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು.ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು.
9ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ,ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು.
10ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ.ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ.
11ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ,ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.
12ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ ಮತ್ತು ಓಫೀರಿನ ಬಂಗಾರಕ್ಕಿಂತಲೂ ವಿರಳವಾಗುವಂತೆ ಮಾಡುವೆನು. 13ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ,
ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.
14ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
15ಸಿಕ್ಕಿದವರೆಲ್ಲರು ಇರಿಯಲ್ಪಡುವರು. ಹಿಂಬಾಲಿಸಿ ಹಿಡಿಯಲ್ಪಟ್ಟ ಸಕಲ ಜನರು ಕತ್ತಿಗೆ ತುತ್ತಾಗುವರು.
16ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು.ಅವರ ಮನೆಗಳನ್ನು ಸೂರೆಮಾಡುವರು. ಅವರ ಹೆಂಡತಿಯರನ್ನು ಅತ್ಯಾಚಾರಕ್ಕೆ ಗುರಿಮಾಡುವರು.
17ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು.ಇವರು ಬೆಳ್ಳಿಯನ್ನು ಲಕ್ಷಿಸರು. ಬಂಗಾರವನ್ನು ಪ್ರೀತಿಸರು.
18ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು.ಇವರು ಹಸುಳೆಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ.
19ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬೆಲೋನಿಗೆ,ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.
20ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು;ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.
21ಕಾಡು ಮೃಗಗಳು ಅಲ್ಲಿ ಮಲಗುವವು. ಅವರ ಮನೆಗಳು ಗೂಬೆಗಳಿಂದ ತುಂಬಿರುವವು.ಅಲ್ಲಿ ಉಷ್ಟ್ರಪಕ್ಷಿಗಳು ವಾಸಿಸುವವು ಮತ್ತು ಕಾಡಿನ ಟಗರುಗಳು ಅಲ್ಲಿ ಕುಣಿದಾಡುವವು.
22ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ಆ ದಿನಗಳು ಬರುವುದಕ್ಕೆ ತಡವಾಗುವುದಿಲ್ಲ.
141ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.2ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.3ಯೆಹೋವನು ನಿಮ್ಮನ್ನು ಸಂಕಟದಿಂದಲೂ, ಕಳವಳದಿಂದಲೂ, ಕಠಿಣವಾದ ಬಿಟ್ಟಿ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ,4ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು:<<ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು!
5ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು.
6ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು,ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.
7ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ, ಅವರು ಹರ್ಷಧ್ವನಿಗೈಯುತ್ತಾರೆ.
8ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ,<ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ> ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
9ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ.ನಿನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ,
ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ.
10ಅವರೆಲ್ಲರು ನಿನ್ನನ್ನು ಕುರಿತು,<ನೀನು ಸಹ ನಮ್ಮ ಹಾಗೆ ಬಲಹೀನನಾಗಿದ್ದೀ? ನಮಗೆ ಸರಿಸಮಾನನಾಗಿದ್ದೀ?> ಎಂದು ಮಾತನಾಡಿಕೊಳ್ಳುವರು.
11ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ.ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು.
12ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ!ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!
13ನೀನು ನಿನ್ನ ಮನಸ್ಸಿನಲ್ಲಿ, <ನಾನು ಆಕಾಶಕ್ಕೆ ಏರಿ,ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ,
ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು.
14ಉನ್ನತವಾದ ಮೇಘಮಂಡಲದ ಮೇಲೆ ಏರಿಮಹೋನ್ನತನಿಗೆ ಸಮಾನನಾಗುವೆನು> ಎಂದುಕೊಂಡೆಯಲ್ಲಾ!
15ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.
16ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ,<ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ,
17ಲೋಕವನ್ನು ಕಾಡನ್ನಾಗಿ ಮಾಡಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಈ ಮನುಷ್ಯನೋ?> ಎಂದುಕೊಳ್ಳುವರು. 18ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂತಮ್ಮ ತಮ್ಮ ವೈಭವದೊಡನೆ ಸಮಾಧಿಗಳಲ್ಲಿ ದೀರ್ಘ ನಿದ್ರೆ ಮಾಡುತ್ತಾರೆ.
19ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ;ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,
20ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ,ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ.
ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.>>
21ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ,ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ.
22<<ನಾನು ಅವರ ವಿರುದ್ಧವಾಗಿ ಏಳುತ್ತೇನೆ>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.<<ನಾನು ಬಾಬೆಲಿನಿಂದ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಸಂತತಿಯನ್ನೂ ನಿರ್ಮೂಲ ಮಾಡುವೆನು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.
23<<ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು.ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು>> ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.
ಅಶ್ಶೂರದ ವಿಷಯವಾದ ದೈವೋಕ್ತಿ
24ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ,<<ನಾನು ಸಂಕಲ್ಪಿಸಿದ್ದೇ ನೆರವೇರುವುದು,
ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.
25ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು.ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು.
26ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
27ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?>> ಎಂಬುದೇ.ಫಿಲಿಷ್ಟಿಯರ ವಿಷಯವಾದ ದೈವೋಕ್ತಿ
28ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ದೈವೋಕ್ತಿಯು ಬಂದಿತು:29ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ;ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.
30ಬಡವರಲ್ಲಿ ಹಿರಿಯ ಮಕ್ಕಳು ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು.ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು [ಆ ಸರ್ಪವೇ] ಕ್ಷಾಮವು ಕೊಲ್ಲುವುದು.
31ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ!ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.
32ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.
15ಮೋವಾಬಿನ ಬಗ್ಗೆ ದೈವೋಕ್ತಿ
1ಮೋವಾಬಿನ ಬಗ್ಗೆ ದೈವೋಕ್ತಿ.ಒಂದು ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿರ್ಮೂಲವಾಯಿತು;
ಹೌದು, ಒಂದು ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವೂ ಹಾಳಾಗಿ ನಿರ್ಮೂಲವಾಯಿತು.
2ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ.ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ.
ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.
3ಬೀದಿಗಳಲ್ಲಿ ತಿರುಗುವವರು ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆಮತ್ತು ತಮ್ಮ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ಎಲ್ಲರು ಅರಚುತ್ತಾ ಕಣ್ಣೀರನ್ನು ಸುರಿಸಿ ಸುರಿಸಿ ಗೋಳಾಡುತ್ತಾ ಇಳಿದು ಹೋಗಿದ್ದಾರೆ.
4ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಇವುಗಳ ರೋದನವು ಯಹಜಿನ ಪಟ್ಟಣದವರೆಗೂ ಕೇಳಿಸುತ್ತದೆ.ಇದರಿಂದ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುತ್ತಾರೆ; ಅವರ ಹೃದಯಗಳು ಭಯದಿಂದ ತತ್ತರಿಸುತ್ತದೆ.
5ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ,ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ,
ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ.
6ನಿಮ್ರೀಮ್ ಹೊಳೆಯು ಹಾಳಾಯಿತು,ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸಿರೂ ಇಲ್ಲ.
7ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ,ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.
8ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ,ಅದರ ಅರಚಾಟವು ಎಗ್ಲಯಿಮಿನವರೆಗೂ, ಬೆಯೇರ್ ಏಲೀಮಿನ ಪರ್ಯಂತರವೂ ವ್ಯಾಪಿಸಿದೆ.
9ದೀಮೋನಿನ ನೀರೆಲ್ಲಾ ರಕ್ತವಾಯಿತು. ಆದರೆ ದೀಮೋನಿನ ಮೇಲೆ ಹೆಚ್ಚು ಬಾಧೆಯನ್ನು, ಅಂದರೆ ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ,ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
161ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಗಳನ್ನುಅರಣ್ಯದ ಕಡೆಯಿರುವ ಸೆಲದಿಂದ ಚೀಯೋನ್ ನಗರದ ಪರ್ವತಕ್ಕೆ ಕಳುಹಿಸಿರಿ.
2ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಜನರು ಅಲೆಯುವ ಪಕ್ಷಿಗಳಂತೆಯೂ,ಗೂಡಿನಿಂದ ಚದುರಿರುವ ಮರಿಗಳಂತೆಯೂ ಆಗುವರು.
3ಆಲೋಚನೆ ಹೇಳಿರಿ, ತೀರ್ಮಾನಿಸಿರಿ; ನಡು ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾದ ನೆರಳನ್ನು ಕೊಡಲಿ.ನಿಮ್ಮಲ್ಲಿರುವ ದೀನದಲಿತರನ್ನು ಸಂರಕ್ಷಿಸು, ತಪ್ಪಿಸಿಕೊಂಡು ಹೋಗುವ ಜನರ ವಿಷಯವನ್ನು ಬಯಲುಮಾಡಬೇಡಿ.
4ನಿಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಯರು ಬಲತ್ಕಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ.ಹಿಂಸಿಸುವವರು ನಿಮ್ಮ ದೇಶದಿಂದ ನಿರ್ಮುಲವಾಗುವರು,
ನಾಶನವು ನಿಂತುಹೋಗುವುದು.
ಪೀಡಿಸುವವರು ನಿಮ್ಮ ದೇಶದಿಂದ ನಿರ್ಮೂಲರಾಗುವರು.
5ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ಸ್ಥಾಪಿತವಾಗುವುದು.ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ನೀತಿನ್ಯಾಯದಿಂದ ಕುಳಿತುಕೊಳ್ಳುವನು.
6ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ.ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ.
7ಆದಕಾರಣ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವುದು. ಪ್ರತಿಯೊಬ್ಬನೂ ಪ್ರಲಾಪಿಸುವನು.ನೀವು ಕೀರ್ ಹರೆಷೆಥಿನ ಜನರ ದೀಪದ್ರಾಕ್ಷೆಯ ಕಡುಬು ಹಾಳಾಯಿತಲ್ಲಾ ಎಂದು ನರಳುವಿರಿ.
8ಹೆಷ್ಬೋನಿನ ಭೂಮಿಯು, ಸಿಬ್ಮದ ದ್ರಾಕ್ಷಾಲತೆಯು ಒಣಗಿ ಹೋಗಿದೆ.ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ,
ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷಿಗಳನ್ನು,
ಜನಾಂಗಗಳ ಒಡೆಯರನ್ನು ತುಳಿದುಬಿಟ್ಟಿದ್ದಾನೆ.
9ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು.ಹೆಷ್ಬೋನೇ, ಎಲ್ಲಾಲೇ ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು.
ನಿಮ್ಮ ಹಣ್ಣಿನ ಮೇಲೆಯೂ, ನಿಮ್ಮ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುವುದನ್ನು ನಿಲ್ಲಿಸಿಬಿಟ್ಟಿದ್ದೇನೆ.
10ಹರ್ಷಾನಂದಗಳು ತೋಟಗಳಿಂದ ತೊಲಗಿವೆ. ದ್ರಾಕ್ಷಿಯ ತೋಟಗಳಲ್ಲಿ ಉತ್ಸಾಹದ ಧ್ವನಿಯೂ, ಉಲ್ಲಾಸದ ಆರ್ಭಟವೂ ಇರುವುದಿಲ್ಲ.ತುಳಿಯುವವರು ದ್ರಾಕ್ಷಿಯ ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.
11ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.
12ಮೋವಾಬ್ಯರು ಸನ್ನಿಧಿಗೆ ಸೇರಿ, ದಿಣ್ಣೆಯಲ್ಲಿನ ಪೂಜೆಯಿಂದ ಬಹಳ ಆಯಾಸಗೊಂಡುಪ್ರಾರ್ಥನೆಗಾಗಿ ತಮ್ಮ ದೇವಾಲಯಕ್ಕೆ ಬಂದರೂ ಅವರ ಪ್ರಾರ್ಥನೆಯು ಸಫಲವಾಗುವುದಿಲ್ಲ.
13ಯೆಹೋವನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತುಗಳು ಇದೇ.14ಆಗ ಯೆಹೋವನು ತಿರುಗಿ ಹೇಳಿದ್ದೇನೆಂದರೆ, <<ಮೂರು ವರ್ಷದೊಳಗೆ ಮೋವಾಬಿನ ವೈಭವವು ಕಣ್ಮರೆಯಾಗುವುದು. ಅವರ ದೊಡ್ಡ ಗುಂಪು ನಾಶವಾಗುವುದು ಅವರ ಜನರಲ್ಲಿ, ಉಳಿದವರು ಕೇವಲ ಚಿಕ್ಕ ಗುಂಪಾಗಿ ಬಲಹೀನರಾಗುವರು>> ಎಂಬುದೇ.
17ದಮಸ್ಕದ ವಿಷಯವಾದ ದೈವೋಕ್ತಿ
1ದಮಸ್ಕದ ವಿಷಯವಾದ ದೈವೋಕ್ತಿ.<<ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.
2ಆರೋಯೇರಿನ ಪಟ್ಟಣಗಳು ನಿರ್ಜನವಾಗಿ, ಮಂದೆಗಳಿಗೆ ಆಸರೆಯಾಗುವವು.ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು.
3ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು.ಅರಾಮ್ಯರಲ್ಲಿ ಉಳಿದವರು ಇಸ್ರಾಯೇಲರ ಮಕ್ಕಳ ವೈಭವದಂತೆ ಇರುವರು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.
4<<ಆ ದಿನದಲ್ಲಿ,ಯಾಕೋಬಿನ ಮಾಂಸದ ಕೊಬ್ಬು ಕರಗಿ, ಅದರ ಮಹಿಮೆಯೂ ಕ್ಷೀಣವಾಗುವುದು.
5ಹೊಲದಲ್ಲಿ ಬೆಳೆ ಕೊಯ್ಯುವವನು ಪೈರುಗಳನ್ನು ಒಟ್ಟುಗೂಡಿಸಿ ಕೈಯಿಂದ ತೆನೆಗಳನ್ನು ಕತ್ತರಿಸುವ ಹಾಗಿರುವುದು.ಹೌದು, ರೆಫಾಯೀಮ್ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆ ಇರುವುದು.
6ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ,ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು>> ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ.
7ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು.8ತಮ್ಮ ಕೈಯಿಂದ ಮಾಡಿದ ಬಲಿಪೀಠಗಳನ್ನು ಲಕ್ಷಿಸದೆ, ತಮ್ಮ ಬೆರಳುಗಳಿಂದ ನಿರ್ಮಿಸಿದ ಅಶೇರವೆಂಬ ವಿಗ್ರಹಸ್ತಂಭಗಳನ್ನಾಗಲಿ, ಸೂರ್ಯಸ್ತಂಭಗಳನ್ನಾಗಲಿ ದೃಷ್ಟಿಸುವುದಿಲ್ಲ.9ಆ ದಿನದಲ್ಲಿ ದೇಶದ ಬಲವಾದ ಕೋಟೆಗಳು ಪೂರ್ವದಲ್ಲಿ ಇಸ್ರಾಯೇಲರ ಭಯದಿಂದ ನಿರ್ಜನವಾಗಿದ್ದ,ಅದು ಅಡವಿಯಲ್ಲಿಯೂ, ಬೆಟ್ಟಗಳ ತುದಿಯ ಮೇಲೂ ಕಾಣುವ ಹಾಳು ನಿವೇಶನಗಳಂತಿರುವವು, ಅಂತೂ ದೇಶವೆಲ್ಲಾ ಹಾಳಾಗಿರುವುದು.
10ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ.ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ.
11ಬೀಜವನ್ನು ನೆಟ್ಟ ದಿನದಲ್ಲಿಯೇ ಬೇಲಿಕಟ್ಟಿ, ಮರುದಿನ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ.ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವಾಗಿರುತ್ತದೆ.
ಅಶ್ಶೂರದ ವಿಷಯವಾದ ದೈವೋಕ್ತಿ
12ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ!ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!
13ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ.ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.
14ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ.ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.
18ಕೂಷಿನ ವಿಷಯವಾದ ದೈವೋಕ್ತಿ
1ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು,
2ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದಿಯ ಮಾರ್ಗವಾಗಿ ಕಳುಹಿಸುವ ದೇಶ,ವೇಗವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನಯವಾದ ಚರ್ಮವುಳ್ಳವರೂ,
ಸರ್ವ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ,
ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.
3ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ,ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!
4ಯೆಹೋವನು ನನಗೆ ಹೇಳುವುದೇನೆಂದರೆ, <<ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ,ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು>> ಎಂಬುದೇ.
5ಕೊಯ್ಲಿನ ಕಾಲಕ್ಕೆ ಮೊದಲು ಮೊಗ್ಗು ಬಿಟ್ಟಾದ ಮೇಲೆ, ಹೂವಿನಿಂದ ಹೀಚು ದ್ರಾಕ್ಷಿ ದೋರೆ ಕಾಯಿಯಾಗುವಾಗ,ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು.
6ಅವೆಲ್ಲವು ಬೆಟ್ಟದ ಪಕ್ಷಿಗಳಿಗೂ, ಭೂಮಿಯ ಕಾಡುಮೃಗಗಳಿಗೂ ಆಹಾರವಾಗಿ ಬಿದ್ದಿರುವವು.ಬೇಸಿಗೆಯಲ್ಲಿ ಪಕ್ಷಿಗಳಿಗೂ, ಹಿಮಕಾಲದಲ್ಲಿ ಕಾಡುಮೃಗಗಳಿಗೂ ಆಹಾರವಾಗುವುದು.
7ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು. 19ಐಗುಪ್ತದ ವಿಷಯವಾದ ದೈವೋಕ್ತಿ
1ಐಗುಪ್ತದ ವಿಷಯವಾದ ದೈವೋಕ್ತಿ.ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು.
ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.
2<<ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ,ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.
3ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು.ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.
4ಇದಲ್ಲದೆ ಐಗುಪ್ತ್ಯರನ್ನು ಕ್ರೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು>>ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.
5ಮಹಾನದಿಯ ನೀರು ಬತ್ತಿಹೋಗುವುದು. ನದಿಗಳ ತೀರಗಳು ಇಂಗಿ ಒಣಗುವುದು.
6ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು.ಆಪು ಮತ್ತು ಜಂಬುಹುಲ್ಲುಗಳು ಬಾಡುವವು.
7ನೈಲ್ ನದಿಯ ತೀರ, ನೈಲ್ ನದಿಯ ತೀರದಲ್ಲಿ ಇರುವ ಬಯಲುಗಳು,ನೈಲ್ ನದಿಯ ತೀರದಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ, ಗಾಳಿಗೆ ಸಿಕ್ಕಿ ಮಾಯವಾಗುವವು.
8ಬೆಸ್ತರು ದುಃಖಿಸುವರು ಮತ್ತು ನೈಲ್ ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು.ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿ ಹೋಗುವರು.
9ನಯವಾದ ಸೆಣಬಿನ ಕೆಲಸದವರೂ, ಬಿಳಿ ಬಟ್ಟೆಯನ್ನು ನೇಯುವವರೂ ಹತಾಶರಾಗುವರು.
10ಐಗುಪ್ತದಲ್ಲಿ ಬಟ್ಟೆಯನ್ನು ನೇಯುವವರೂ ನಿರಾಶರಾಗುವರು. ಕೂಲಿಯವರು ಮನಮರಗುವರು. 11ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ.ನೀನು ಫರೋಹನಿಗೆ, <<ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.
12ನಿನ್ನ ಜ್ಞಾನಿಗಳು ಎಲ್ಲಿ?>> ಎಂದು ಅವರು ನಿನಗೆ ತಿಳಿ ಹೇಳಲಿ.ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ.
13ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.
14ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ.ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.
15ಐಗುಪ್ತದಲ್ಲಿ ತಲೆಯಾಗಲಿ, ಬಾಲವಾಗಲಿ, ಖರ್ಜೂರದ ಕೊಂಬೆಯಾಗಲಿ ಅಥವಾ ಹುಲ್ಲಾಗಲಿ ಸಾಧಿಸಲು ಸಾಧ್ಯವಾಗದ ಯಾವ ಕೆಲಸವೂ ಇರುವುದಿಲ್ಲ. 16ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.17ಐಗುಪ್ತವು ಬೆಚ್ಚಿಬೀಳುವುದಕ್ಕೆ ಯೆಹೂದ ದೇಶವೇ ಕಾರಣವಾಗುವುದು. ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೇನಾಧೀಶ್ವರನಾದ ಯೆಹೋವನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಸಂಕಲ್ಪವನ್ನು ತಿಳಿದು ಬೆರಗಾಗುವನು.18ಆ ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು <<ನಾಶಪುರ.>>19ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು.20ಅವು ಐಗುಪ್ತ ದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ, ಸಾಕ್ಷಿಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.21ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.22ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.23ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.24ಆ ದಿನದಲ್ಲಿ, ಇಸ್ರಾಯೇಲರು ಐಗುಪ್ತ, ಅಶ್ಶೂರಗಳೊಂದಿಗೆ ಮೂರನೆಯದಾಗಿ ಬೆರೆತು ಲೋಕದ ಮಧ್ಯದಲ್ಲಿ ಆಶೀರ್ವಾದ ನಿಧಿಯಾಗಿರುವುದು.25<<ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ>> ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.
20ಐಗುಪ್ತದ ಮತ್ತು ಕೂಷಿನ ವಿಷಯವಾದ ದೈವೋಕ್ತಿ
1ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು ಅಷ್ದೋದಿಗೆ ಬಂದು ಅದರ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿಕೊಂಡನು.2ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, <<ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು>> ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು.3ಆಗ ಯೆಹೋವನು ಹೀಗೆ ಹೇಳಿದನು, <<ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಆಶ್ಚರ್ಯವಾದ ಗುರುತಾಗಿ ಮೂರು ವರ್ಷ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ನಡೆದನು.>>4ಈ ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.5ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.6ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, <<ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?>> ಎಂದು ಅಂದುಕೊಳ್ಳುವರು.
21ಬಾಬೆಲಿನ ವಿಷಯವಾದ ದೈವೋಕ್ತಿ
1ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ.ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ
ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ
2ಘೋರದರ್ಶನವು ನನಗೆ ತಿಳಿಯ ಬಂದಿದೆ;ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ.
ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು!
ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
3ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ,ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ,
ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.
4ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ,ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ.
5ಔತಣಕ್ಕೆ ಸಿದ್ಧಪಡಿಸಿಕೊಂಡು, ಚಾಪೆಗಳನ್ನು ಹಾಸಿಕೊಂಡು ತಿಂದು, ಕುಡಿಯುತ್ತಾರೆ;ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿ ಸಿದ್ಧವಾಗಿ!
6ಕರ್ತನು ನನಗೆ ಹೇಳುವುದೇನೆಂದರೆ,<<ಹೋಗು, ಕಾವಲುಗಾರನನ್ನು ನೇಮಿಸು; ಅವನು ಕಂಡದ್ದನ್ನು ತಿಳಿಸಲಿ.
7ಅವನು ಜೋಡಿ ಜೋಡಿಯಾಗಿ ಬರುವ ಸವಾರರ ಸಾಲನ್ನೂ,ಕತ್ತೆಗಳ ಮತ್ತು ಒಂಟೆಗಳ ಸಾಲುಗಳನ್ನೂ ನೋಡಿದರೆ,
ಬಹಳ ಗಮನದಿಂದ ಕಿವಿಗೊಟ್ಟು ಗಮನಿಸಲಿ>> ಎಂಬುದೇ.
8ಬಳಿಕ ಅವನು ಸಿಂಹದಂತೆ ಕೂಗಿ,<<ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ,
ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
9ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.>>ಅವನು ಕೂಗಿ, <<ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು!
ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು>> ಎಂದು ಹೇಳುವನು.
10ನನ್ನ ಕಣದ ದವಸವೇ, ನನ್ನ ಬಡಿತಕ್ಕೆ ಈಡಾದವರೇ!ಇಸ್ರಾಯೇಲರ ದೇವರಾಗಿರುವ ಸೇನಾಧೀಶ್ವರನಾದ ಯೆಹೋವನಿಂದ,
ನಾನು ಕೇಳಿದ್ದನ್ನೇ ನಿಮಗೆ ತಿಳಿಸಿದ್ದೇನೆ.
ಎದೋಮಿನ ಬಗ್ಗೆ ದೈವೋಕ್ತಿ
11ದೂಮದ ಬಗ್ಗೆ ದೈವೋಕ್ತಿ.ಆತನು ಸೇಯೀರಿನಿಂದ ನನ್ನನ್ನು ಕರೆದು, <<ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು
12ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ>> ಎಂದು ಕಾವಲುಗಾರನು ಹೇಳಿದನು.ಅರಬಿಯ ಬಗ್ಗೆ ದೈವೋಕ್ತಿ
13ಅರಬಿಯ ವಿಷಯವಾದ ದೈವೋಕ್ತಿ.ಓ ದೇದಾನ್ಯರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ.
14ಬಾಯಾರಿದವರಿಗೆ ನೀರನ್ನು ತಂದುಕೊಡಿರಿ,ತೇಮಾ ದೇಶದ ನಿವಾಸಿಗಳೇ ಓಡಿ ಹೋದವರನ್ನು ರೊಟ್ಟಿಯೊಡನೆ ಎದುರುಗೊಳ್ಳಿರಿ.
15ಏಕೆಂದರೆ ಹಿರಿದ ಕತ್ತಿ, ಬಾಗಿದ ಬಿಲ್ಲು,ಯುದ್ಧದ ಬಾಧೆ ಇವುಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ.
16ಕರ್ತನು ನನಗೆ ಹೇಳುವುದೇನೆಂದರೆ, <<ಕೂಲಿಯವನ ವರ್ಷಗಳಂತೆ ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವವು ಇಲ್ಲವಾಗುವುದು.17ಕೇವಲ ಕೆಲವೇ ಬಿಲ್ಲುಗಾರರೂ ಹಾಗೂ ಕೇದಾರಿನ ಶೂರರೂ ಉಳಿಯುವರು>> ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ನುಡಿದಿದ್ದಾನೆ.
22ಯೆರೂಸಲೇಮಿನ ಬಗ್ಗೆ ದೈವೋಕ್ತಿ
1ದಿವ್ಯದರ್ಶನದ ಕಣಿವೆಯ ವಿಷಯವಾದ ದೈವೋಕ್ತಿ.ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು?
2ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ;ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ.
3ನಿನ್ನ ಅಧಿಕಾರಿಗಳು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ;ದೂರದಿಂದ ಓಡುತ್ತಾ ಶತ್ರುವಿಗೆ ಸಿಕ್ಕಿದ ನಿನ್ನ ಜನರೆಲ್ಲರೊಂದಿಗೆ ಕಟ್ಟುಬಿದ್ದಿದ್ದಾರೆ.
4ಹೀಗಿರಲು, <<ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು,ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.
5ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ಕಣಿವೆಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ,ಕೋಟೆಯು ಒಡೆದು ಹೋಗಲು, ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.
6ಏಲಾಮು ಕುದರೆಗಳ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು.ಕೀರಿನವರು ಗುರಾಣಿಯನ್ನು ತೆಗೆದರು.
7ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿದವು,ರಾಹುತರು ಬಾಗಿಲಿನ ಹತ್ತಿರ ವ್ಯೂಹಕಟ್ಟಿದರು.>>
8ಅವನು ಯೆಹೂದದ ರಕ್ಷಣೆಯ ಮುಸುಕನ್ನು ತೆಗೆದಿದ್ದಾನೆ.ಆ ದಿನದಲ್ಲಿ (ಲೆಬನೋನಿನ) ತೋಪು ಎನಿಸಿಕೊಳ್ಳುವ ಮಂದಿರದಲ್ಲಿನ ಆಯುಧಗಳ ಕಡೆಗೆ ದೃಷ್ಟಿಹಾಕಿದಿರಿ.
9ದಾವೀದನ ಪಟ್ಟಣದ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ;ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.
10ಯೆರೂಸಲೇಮಿನ ಮನೆಗಳನ್ನು ಲೆಕ್ಕಿಸಿ, ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ಮನೆಗಳನ್ನು ಒಡೆದು ಹಾಕಿಬಿಟ್ಟಿರಿ.
11ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದೀರಿ;ಆದರೆ ಇದನ್ನೆಲ್ಲಾ ನಡೆಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.
12ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು.ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.
13ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು,ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.
14ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ,<<ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ>> ಎಂಬುದೇ.
ಶೆಬ್ನನ ಬಗ್ಗೆ ದೈವೋಕ್ತಿ
15ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ, <<ಹೋಗು, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನೆಂದರೆ,16<ಇಲ್ಲಿ ನಿನಗೇನು ಕೆಲಸ? ಇಲ್ಲಿ ನಿನಗಾಗಿ ಸಮಾಧಿಯನ್ನು ತೋಡಿಸಿಕೊಂಡಿರುವ ನೀನು ಯಾರು?ಉನ್ನತದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ, ಬಂಡೆಯನ್ನು ಕೆತ್ತಿಸಿ, ನಿನಗಾಗಿ ವಿಶ್ರಾಂತಿಯ ಸ್ಥಳವನ್ನು ತೋಡಿಸಿದಿ ಅಲ್ಲವೇ?> >>
17ಇಗೋ, ಬಲಿಷ್ಠ ಮನುಷ್ಯನಾದ ನಿನ್ನನ್ನು ಯೆಹೋವನು ಎಸೆಯುವನು, ನಿನ್ನನ್ನು ಕೆಳಗೆ ಎಸೆಯುವನು, ನಿನ್ನನ್ನು ಗಟ್ಟಿಯಾಗಿ ಹಿಡಿಯುವನು.
18ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು;ದಣಿಯ ಮನೆಗೆ ಅವಮಾನ ತಂದವನೇ, ಅಲ್ಲೇ ಸಾಯುವಿ, ನಿನ್ನ ವೈಭವದ ರಥಗಳು ಅಲ್ಲೇ ಇರುವವು.
19ಯೆಹೋವನಾದ ನಾನು, <<ನಿನ್ನನ್ನು ಉದ್ಯೋಗದಿಂದ ತಳ್ಳಿಬಿಡುವೆನು, ನಿನ್ನ ಪದವಿಯಿಂದ ನಿನ್ನನ್ನು ಎಳೆದು ಹಾಕುವೆನು. 20ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆಯುವೆನು.
21ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು;ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು.
22ನಾನು ದಾವೀದನ ಮನೆಯ ಬೀಗದ ಕೈಯನ್ನು ನಿನ್ನ ಹೊಣೆಗಾರಿಕೆಗೆ ಕೊಡುವೆನು;ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು.
23ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು.ಅವನು ತನ್ನ ವಂಶದವರಿಗೆ ವೈಭವವುಳ್ಳ ಸಿಂಹಾಸನವಾಗಿರುವನು.
24ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ,ಸಂತತಿಯಾದ ಅವನ ಮನೆಯ ವೈಭವವನ್ನು ಅವರು ಆ ದಿನದಲ್ಲಿ ಅವನಿಗೆ ವಹಿಸುವರು>> ಎಂಬುದೇ.
25ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. <<ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ>> ಎಂಬುದೇ.
23ತೂರಿನ ಬಗ್ಗೆ ಪ್ರವಾದನೆ
1ತೂರಿನ ವಿಷಯವಾದ ದೈವೋಕ್ತಿ.ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ.
ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
2ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ಹಾದು ಹೋಗುವ,ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನವಾಗಿರಿ!
3ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ,ನೈಲ್ ನದಿಯ ಬೆಳೆಯಿಂದಲೂ ಆದಾಯಹೊಂದಿದ ನಿಮ್ಮ ನಗರವು ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.
4ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ,<<ನಾವು ವೇದನೆ ಪಡಲಿಲ್ಲ, ಪ್ರಸವಿಸಲಿಲ್ಲ,
ಯುವತಿ ಯುವಕರನ್ನು ಸಾಕಿ ಸಲಹಲಿಲ್ಲ>> ಎಂದು ನುಡಿದಿದೆಯಷ್ಟೆ.
5ತೂರಿನ ಸಮಾಚಾರವು ಐಗುಪ್ತ್ಯರಿಗೆ ಮುಟ್ಟಿದಾಗ ಅದಕ್ಕಾಗಿ ಸಂಕಟಪಡುವರು. 6ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ದ್ವೀಪ ನಿವಾಸಿಗಳೇ, ಗೋಳಾಡಿರಿ!
7ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ;ಅವರ ಕಾಲುಗಳು ಅವರನ್ನು ದೂರ ದೇಶದಲ್ಲಿ ವಾಸಿಸುವುದಕ್ಕೆ ಕರೆದುಕೊಂಡು ಹೋಗುವವು.
8ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು,ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು?
9ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ,ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.
10ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ.
11ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ.ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.
12ಆತನು, <<ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ;ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು>> ಎಂದು ಹೇಳಿದ್ದಾನೆ.
13ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು.ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು.
14ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು. 15ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು.16ಅದೇನೆಂದರೆ, <<ಎಲ್ಲರೂ ಮರೆತುಹೋದ ವ್ಯಭಿಚಾರಿಯೇ, ಕಿನ್ನರಿಯನ್ನು ತೆಗೆದುಕೊಂಡು ಪಟ್ಟಣದಲ್ಲಿ ಅಲೆಯುತ್ತಾ,ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು>> ಎಂಬುದೇ.
17ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು.18ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.
24ಭೂಮಿಗೆ ಬರಲಿರುವ ವಿನಾಶ
1ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.
2ಪ್ರಜೆಗಳು ಯಾಜಕ, ದಾಸ ಯಜಮಾನ, ದಾಸಿ, ಯಜಮಾನಿ,ಕೊಳ್ಳುವವನು, ಮಾರುವವನು, ಸಾಲ ಕೊಡುವವನು ಸಾಲ ಪಡೆಯುವವನು, ಬಡ್ಡಿ ಪಡೆಯುವವನು ಬಡ್ಡಿ ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವುದು.
3ಭೂಮಿಯು ಬಟ್ಟಬರಿದಾಗುವುದು, ಅದು ಸಂಪೂರ್ಣ ಸುಲಿಗೆಯಾಗುವುದು,ಯೆಹೋವನೇ ಇದನ್ನು ನುಡಿದಿದ್ದಾನೆ.
4ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ.
5ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ,ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.
6ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ.ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
7ದ್ರಾಕ್ಷಾರಸವು ಬತ್ತಿ ಹೋಗುವುದು, ದ್ರಾಕ್ಷಿಯ ಬಳ್ಳಿಯು ಕ್ಷೀಣಿಸುವುದು, ಹರ್ಷ ಹೃದಯರೆಲ್ಲಾ ನರಳುತ್ತಾರೆ. 8ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ,ಕಿನ್ನರಿಯ ಆನಂದವು ಅಡಗಿದೆ.
9ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಮದ್ಯವು ಕುಡಿಯುವವರಿಗೆ ಕಹಿಯಾಗುವುದು. 10ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೋಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ.
11ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಕೊನೆಗೊಂಡಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ. 12ಪಟ್ಟಣಗಳು ಹಾಳೂರಾಗಿ ಉಳಿದಿದೆ; ನಾಶವು ಹೆಬ್ಬಾಗಿಲಿಗೆ ಬಡಿದಿದೆ.
13ಎಣ್ಣೆಯ ಮರವನ್ನು ಕಡಿದ ಬಳಿಕ,ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.
14ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು.ಸಮುದ್ರದ ಕಡೆಯಿಂದ ಆರ್ಭಟಿಸುವರು.
15ಮೂಡಣದವರೇ, <<ಯೆಹೋವನನ್ನು ಸನ್ಮಾನಿಸಿರಿ.ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ>> ಎಂದು ಕೂಗುವರು.
16ಭೂಮಂಡಲದ ಕಟ್ಟಕಡೆಯಿಂದ, <<ನೀತಿವಂತರಿಗೆ ಮಹಿಮೆಯಾಗಲಿ>> ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ <<ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ!ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ>> ಎಂದುಕೊಂಡೆನು.
17ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾದಿವೆ.
18ಭಯದ ಸಪ್ಪಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು,ಗುಂಡಿಯನ್ನು ಹತ್ತಿ ಬರುವವನು ಬಲೆಗೆ ಸಿಕ್ಕುವನು. ನೋಡು,
ಆಕಾಶದ ದ್ವಾರಗಳು ತೆರೆದಿವೆ, ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.
19ಭೂಮಿಯು ಒಡೆದೇ ಇದೆ, ಬಿರಿದಿದೆ,ಕದಲಿಯೇ ಹೋಗಿದೆ.
20ಭೂಮಿಯು ಅಮಲೇರಿದವನ ಹಾಗೆ ಓಲಾಡುತ್ತದೆ, ಗುಡಿಸಲಂತೆ ತೂಗಾಡುತ್ತದೆ;ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರುಗಿ ಏಳುವುದೇ ಇಲ್ಲ.
21ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ,ಭೂಮಂಡಲದ ಒಡೆಯರನ್ನೂ ದಂಡಿಸುವನು.
22ಅವರು ಕೈದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಲ್ಪಟ್ಟು ಅದರಲ್ಲಿ ಮುಚ್ಚಲ್ಪಡುವರು.ಬಹಳ ದಿನಗಳ ನಂತರ ದಂಡನೆಗೆ ಗುರಿಯಾಗುವರು.
23ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು;ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು.
ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.
25ನ್ಯಾಯತೀರ್ಪು ಮತ್ತು ರಕ್ಷಣೆಗಾಗಿ ಸ್ತುತಿ
1ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ,ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.
2ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ,ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ.
3ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವುದು, ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವುದು. 4ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ,ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು
ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.
5ಮೋಡಗಳು ಒಣನೆಲದ ಕಾವನ್ನು ತಂಪಾಗಿಸುವಂತೆನೀನು ಅನ್ಯರ ಗದ್ದಲವನ್ನು ತಗ್ಗಿಸುವಿ;
ಮೋಡದ ನೆರಳಿನಿಂದ ಬಿಸಿಲು ಹೇಗೆ ಕಡಿಮೆಯಾಗುವುದೋ ಹಾಗೆ ನಿನ್ನಿಂದ ಭೀಕರರ ಉತ್ಸಾಹ ಗಾನವು ಕ್ರಮೇಣ ನಿಂತುಹೋಗುವುದು.
6ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ,ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.
7ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ,ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು.
8ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು;ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು;
ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.
9ಆ ದಿನದಲ್ಲಿ ಜನರು, <<ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು,ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು>> ಎಂದು ಹೇಳಿಕೊಳ್ಳುವರು.
10ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು;ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.
11ಈಜುವವನು ಕೈಯಾಡಿಸುವಂತೆ ಅವರು ಅದರಲ್ಲಿಯೇ ಕೈಯಾಡಿಸುವರು; ಆದರೆ ಯೆಹೋವನು ಅವರ ಗರ್ವವನ್ನೂ, ಕೈಯ ಚಮತ್ಕಾರವನ್ನೂ ತಗ್ಗಿಸಿಬಿಡುವನು.
12ದುರ್ಗಮವಾಗಿಯೂ, ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲ ಸಮಮಾಡಿ ಧೂಳಿಗೆ ತರುವನು. 26ಸ್ತೋತ್ರಗೀತೆ
1ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು,<<ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.
2ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ! 3ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.
4ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ. 5ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ.ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ.
6ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ. 7ನೀತಿವಂತನ ಮಾರ್ಗವು ಸಮವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ನೇರಮಾಡುತ್ತಿ.
8ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ;ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.
9ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ.ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.
10ದುಷ್ಟರನ್ನು ಕರುಣಿಸಿದರೂ, ಅವರು ಧರ್ಮಜ್ಞಾನವನ್ನು ಪಡೆಯರು;ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥರ ದೇಶದಲ್ಲಿಯೂ ಅನ್ಯಾಯವನ್ನು ಆಚರಿಸುವರು.
11ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು.ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.
12ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ. 13ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು; ಆದರೆ ನಾವು ನಿನ್ನ ನಾಮವನ್ನೇ ಹೊಗಳುವೆವು, ಸ್ತುತಿಸುವೆವು.
14ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ.ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ.
15ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ;ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದೀ.
16ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.
17ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ, ಬೇನೆಯಿಂದ ಕೂಗಿ ಅಳುವಂತೆ ಯೆಹೋವನೇ,ನಾವು ನಿನ್ನ ಮುಂದೆ ಸಹಾಯಕ್ಕಾಗಿ ಕೂಗಿ ದುಃಖಿಸಿದ್ದೇವೆ.
18ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹಡೆದಂತಾಯಿತು, ದೇಶಕ್ಕೆ ನಮ್ಮಿಂದ ಯಾವ ಉದ್ಧಾರವೂ ಆಗಲಿಲ್ಲ,ನಮ್ಮೊಳಗೆ ಯಾವ ಭೂನಿವಾಸಿಗಳೂ ಹುಟ್ಟಲಿಲ್ಲ.
19ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ!ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.
ಯೆಹೋವನ ಶಿಕ್ಷೆ
20ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ;ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.
21ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ;ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.>>
271ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ,
ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.
ಯೆಹೋವನ ದ್ರಾಕ್ಷಿ ತೋಟದ ಗೀತೆ
2ಆ ದಿನದಲ್ಲಿ ಫಲಭರಿತ ದ್ರಾಕ್ಷಿಯ ತೋಟದ ವಿಷಯವಾಗಿ ಹಾಡಿರಿ,
3<<ಯೆಹೋವನಾದ ನಾನೇ ಅದನ್ನು ಕಾಯುತ್ತೇನೆ. ಪ್ರತಿ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ;ಯಾರೂ ಅದಕ್ಕೆ ಕೇಡು ಮಾಡದ ಹಾಗೆ ಹಗಲಿರುಳೂ ಕಾಯುತ್ತೇನೆ.
4ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ,ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.
5ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನ ಸಂಗಡ ಸಮಾಧಾನ ಮಾಡಿಕೊಳ್ಳಲಿ. 6ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು,ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.>>
ಯೆಹೋವನು ಇಸ್ರಾಯೇಲನ್ನು ಶಿಕ್ಷಿಸುವುದು
7ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ?
8ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ. 9ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ,ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು
ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.
10ಕೋಟೆಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ;ಅಲ್ಲಿ ಕರುಗಳು ಮೇದು ಮಲಗುವುದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವುದು.
11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು.ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.
ಇಸ್ರಾಯೇಲರ ಪುನರಾಗಮನ
12ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ;
ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು.
13ಆ ದಿನದಲ್ಲಿ ದೊಡ್ಡ ಕೊಂಬನ್ನೂದಲುಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು
ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.
28ಇಸ್ರಾಯೇಲರಿಗೆ ಎಚ್ಚರಿಕೆ
1ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ!ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!
2ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ,ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು.
3ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು.
4ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ,ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು,
ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು.
5ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.
6ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.ಯೆಶಾಯನು ಯೆರೂಸಲೇಮಿನ ಅಧಿಪತಿಗಳನ್ನು ಖಂಡಿಸಿದ್ದು
7ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ;ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ,
ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.
8ಅವರ ಮೇಜುಗಳ ಮೇಲೆಲ್ಲಾ ವಾಂತಿಯೂ, ಎಂಜಲೂ ತುಂಬಿವೆ, ಶುದ್ಧವಾದ ಸ್ಥಳವೇ ಇಲ್ಲ. 9ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ?ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ?
10ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ. 11ಹೌದು, ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಯೆಹೋವನು ಈ ಜನರೊಂದಿಗೆ ಮಾತನಾಡುವನು.12ಆತನು ಮೊದಲು, <<ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ,ನಿಮಗೆ ಅನುಕೂಲವಾದ ಉಪಶಮನವು ಇದೇ>> ಎಂದು ಹೇಳುವಾಗ ಇವರು ಕೇಳದೆ ಹೋದರು.
13ಹೀಗಿರಲು ಯೆಹೋವನ ಮಾತುಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ,
ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು;
ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.
ಯೆಹೂದಕ್ಕೆ ಎಚ್ಚರಿಕೆ
14ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ,ಯೆಹೋವನ ಮಾತನ್ನು ಕೇಳಿರಿ,
15ನೀವು ನಿಮ್ಮೊಳಗೆ, <<ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ;ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು;
ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ>> ಎಂದು ಅಂದುಕೊಂಡಿದ್ದೀರಿ.
16 ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ,<<ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ,
ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
17ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು,ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.
18ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು;ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು.
19ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು;ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು;
ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು.
20ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.>>
21ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.
22ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ;ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.
ಯೆಹೋವನ ಕಾರ್ಯಗಳ ವಿವೇಕವು
23ನನ್ನ ಧ್ವನಿಯನ್ನು ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
24ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ? 25ಅಂತು ಭೂಮಿಯನ್ನು ಹಸನು ಮಾಡಿದ ಮೇಲೆ ಅಗಸೆಯನ್ನು, ಜೀರಿಗೆಯನ್ನು ಬಿತ್ತಿ,ಗೋದಿಯನ್ನು ಸಾಲು ಸಾಲಾಗಿ ತಕ್ಕ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ?
26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ. 27ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ;ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ.
28ಗೋದಿಯ ಕಾಳನ್ನು ನುಚ್ಚು ಮಾಡುವನೋ?ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.
29ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ,ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.
29ಯೆರೂಸಲೇಮಿಗೆ ಎಚ್ಚರಿಕೆ
1ಅಯ್ಯೋ, ಅರೀಯೇಲೇ, ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ!ಈ ವರ್ಷಕ್ಕೆ ಮುಂದಿನ ವರ್ಷವನ್ನು ಸೇರಿಸಿರಿ; ಹಬ್ಬಗಳು ಹೆಚ್ಚಾಗಿ ಬರಲಿ.
2ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು;ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು.
3ನಾನು ನಿನ್ನ ಸುತ್ತಲೂ ದಂಡಿಳಿಸಿ,ನಿನಗೆ ವಿರುದ್ಧವಾಗಿ ಕೋಟೆಗಳನ್ನು ಕಟ್ಟಿ, ದಿಬ್ಬಹಾಕಿ ನಿನ್ನನ್ನು ಮುತ್ತುವೆನು.
4ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ, ನಿನ್ನ ನುಡಿಯು ಮಣ್ಣಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು,ನಿನ್ನ ಧ್ವನಿಯು ಪ್ರೇತದ ಧ್ವನಿಯಂತೆ ನೆಲದೊಳಗಿಂದ ಬರುವುದು, ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು.
5ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು;ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು.
6ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.
7ಅರೀಯೇಲಿನ ಮೇಲೆ ಹೋರಾಡಿ, ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ,ಬಾಧಿಸುವ ಸಕಲ ಜನಾಂಗಗಳ ಗುಂಪು,
ಕನಸಿನಂತೆ, ರಾತ್ರಿಯ ಸ್ವಪ್ನದ ಹಾಗೆ ಮಾಯವಾಗುವುದು.
8ಹಸಿದವನು ಕನಸು ಕಂಡು ಆಹಾ, ತಿನ್ನುತ್ತಿದ್ದೇನೆ ಎಂದುಕೊಂಡಂತಾಗುವುದು; ಎಚ್ಚೆತ್ತಾಗ ಅವನ ಹೊಟ್ಟೆ ಬರಿದಾಗಿಯೇ ಇರುವುದು.ಬಾಯಾರಿದವನು ಸ್ವಪ್ನದಲ್ಲಿ ಇಗೋ ನೀರು ಕುಡಿಯುತ್ತಿದ್ದೇನೆ ಎಂದುಕೊಂಡಂತಾಗುವುದು; ನಿದ್ರೆಯಿಂದ ಎಚ್ಚೆತ್ತಾಗ ಬಲಹೀನನಾಗಿದ್ದು, ಬಳಲಿ ನೀರನ್ನು ಬಯಸುತ್ತಾ ಬಾಯಾರಿಕೆಯಿಂದ ಇರುವನು.
ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ಜನಾಂಗಗಳಿಗೂ ಇದೇ ಗತಿಯಾಗುವುದು.
ಯೆರೂಸಲೇಮಿನ ಮೂಢಭಕ್ತಿ
9ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ!ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.
10ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ,ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.
11ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರ ಬಲ್ಲವನಿಗೆ, <<ಇದನ್ನು ಓದು>> ಎಂದು ಹೇಳಿದರೆ ಅವನು, <<ಮುದ್ರೆ ಹಾಕಿದೆಯಲ್ಲಾ, ಆಗುವುದಿಲ್ಲ>> ಎಂದು ಹೇಳುವನು.12ಅಕ್ಷರವಿಲ್ಲದವನಿಗೆ, <<ಇದನ್ನು ಓದು>> ಎಂದು ಹೇಳಿದರೆ ಅವನು, <<ನನಗೆ ಓದಲು ಬರುವುದಿಲ್ಲ>> ಎಂದು ಹೇಳುವನು.13ಯೆಹೋವನು ಹೇಳುವುದೇನೆಂದರೆ, <<ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ,ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು,
ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
14ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು;ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು>> ಎಂದು ಹೇಳಿದನು.
ಭವ್ಯಭವಿಷ್ಯದ ಭರವಸೆ
15ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆಹೋಗಿ, <<ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?>> ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!
16ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು.ಕೆಲಸ ಮಾಡಿದವನಿಗೆ ಮಾಡಲ್ಪಟ್ಟದ್ದು, <<ಆತನು ಕೆಲಸ ಮಾಡಲಿಲ್ಲ>> ಎಂದು ಹೇಳುವುದೋ? ಇಲ್ಲವೇ,
ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟದ್ದು, <<ಆತನಿಗೆ ವಿವೇಕವಿಲ್ಲ>> ಎಂದು ಹೇಳುವುದೋ?
17ಇನ್ನು ಸ್ವಲ್ಪ ಕಾಲದೊಳಗೆಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು.
18ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತುಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.
19ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು,ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.
20ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು.
21ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ,ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು.
22ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ,<<ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ.
23ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ,ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು.
24ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣಗುಟ್ಟುವವರು ಉಪದೇಶವನ್ನು ಕೇಳಿ ನಡೆಯುವರು>> ಎಂದು ಹೇಳುತ್ತಾನೆ.
30ಐಗುಪ್ತರೊಡನೆ ಸಂಧಾನ ವ್ಯರ್ಥ
1ಯೆಹೋವನು ಹೀಗೆ ನುಡಿಯುತ್ತಾನೆ, <<ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ>><<ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ
ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
2ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು,ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.
3ಆದುದರಿಂದ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯು,ಐಗುಪ್ತವನ್ನು ಆಶ್ರಯಿಸುವುದರಿಂದ ಅವಮಾನವು ಉಂಟಾಗುವುದು.
4ಆ ಫರೋಹನ ಪ್ರಧಾನರು ಚೋವನಿನಲ್ಲಿದ್ದರೂ, ಅವನ ದೂತರು ಹಾನೇಸಿಗೆ ಬಂದಿದ್ದಾರೆ.
5ತಮಗೆ ಸಹಾಯವನ್ನೂ, ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ,ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.>>
6ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ.ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು,
ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ
ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.
7ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ;ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.
ಐಗುಪ್ತದ ಆಶ್ರಯದಿಂದಾಗುವ ದುರ್ಗತಿ
8ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ,ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು.
9ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು,ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.
10ಇವರು ದಿವ್ಯದರ್ಶಿಗಳಿಗೆ, <<ನಿಮಗೆ ದರ್ಶನವಾಗದಿರಲಿ>> ಎನ್ನುತ್ತಾರೆ,ಮತ್ತು ಪ್ರವಾದಿಗಳಿಗೆ, <<ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ,
ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.
11ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ;ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ>> ಎಂದು ಹೇಳುತ್ತಾರೆ.
12ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ,<<ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ,
ಬಲಾತ್ಕಾರ ಕುಯುಕ್ತಿಗಳನ್ನು ನಂಬಿ,
13ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ,ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ,
ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.>>
14ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ,ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ,
ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು.
15ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು,<<ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ,
ನೀವು ಒಪ್ಪಿಕೊಂಡಿಲ್ಲ.
16ನೀವು, <ಬೇಡವೇ ಬೇಡ,ಕುದುರೆಗಳ ಮೇಲೆ ಓಡುವೆವು> ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ,
ನೀವು, <ವೇಗವಾಗಿ ಸವಾರಿ ಮಾಡುವೆವು> ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.
17ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು;ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ;
ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.>>
ಯೆಹೂದ್ಯರ ಮುಂದಿನ ವಿಧೇಯತೆ ಮತ್ತು ಸುಸ್ಥಿತಿಯೂ
18ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು;ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
19ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ,ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.
20ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ,ನಿಮ್ಮ ಬೋಧಕನು ಇನ್ನು ಮರೆಯಾಗಿರನು,
ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ.
21ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ,<<ಇದೇ ಮಾರ್ಗ, ಇದರಲ್ಲೇ ನಡೆಯಿರಿ>> ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.
22ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ,ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, <<ತೊಲಗಿ ಹೋಗಿರಿ>> ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.
23ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು;ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು;
ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.
24ಹೊಲವನ್ನು ಊಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ,ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವವು.
25ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ,ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು.
26ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ,ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.
ಯೆಹೋವನಿಂದ ಅಶ್ಶೂರ್ಯರಿಗಾದ ವಿನಾಶ
27ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ;ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.
28ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ.ಜನಾಂಗಗಳನ್ನೂ ಸ್ವಲ್ಪವೂ ಉಳಿಸದೆ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.
29ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ.ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.
30ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ,ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.
31ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ಶೂರ್ಯರು ಆತನ ಧ್ವನಿಯಿಂದಲೇ ನಾಶವಾಗುವರು.
32ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು,ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು.
33ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ.ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ;
ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.
31ಯೆಹೋವನೇ ಯೆಹೂದ್ಯರಿಗೆ ನಿಜವಾದ ರಕ್ಷಕ
1ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ!ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ.
ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.
2ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು.ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
3ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು.ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
4ಯೆಹೋವನು ನನಗೆ ಹೀಗೆ ಹೇಳಿದ್ದಾನೆ,<<ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ,
ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ,
ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ
ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.
5ಹಾರುವ ಪಕ್ಷಿಯಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು.ಅದನ್ನು ರಕ್ಷಿಸಿ ಕಾಯುವನು ಮತ್ತು ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
6<<ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದಿರೋ ಆತನ ಕಡೆಗೆ ತಿರುಗಿಕೊಳ್ಳಿರಿ.7ಏಕೆಂದರೆ ನೀವು ನಿಮ್ಮ ಸ್ವಂತ ಕೈಯಿಂದ ರೂಪಿಸಿಕೊಂಡಿರುವ ಪಾಪದ ಗುರುತಾದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಡುವನು.8ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ.ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು.
9ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು>>ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.
32ಮುಂದಿನ ಧರ್ಮರಾಜ್ಯದ ಸುಲಕ್ಷಣ
1ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
2ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ,ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.
3ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು. 4ಆತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ವಚ್ಛವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು.
5ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸಿಕೊಳ್ಳನು.
6ಏಕೆಂದರೆ ನೀಚನು ನೀಚವಾಗಿ ಮಾತನಾಡುವನು.ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ,
ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.
7ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ,ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
8ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.ಯೆರೂಸಲೇಮಿನ ನಿಶ್ಚಿಂತ ಹೆಂಗಸರನ್ನು ಎಚ್ಚರಿಸಿದ್ದು
9ನಿಶ್ಚಿಂತರಾದ ಸ್ತ್ರೀಯರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ.ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ!
10ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ.ಆಗ ದ್ರಾಕ್ಷಿಯ ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.
11ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ!ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.
12ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಾಗಿ ಎದುರುನೋಡಿರಿ.
13ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ.ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.
14ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ,ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ,
ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.
15ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು,ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.
16ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು.
17ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.
18ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು. 19ಆದರೆ ಕಲ್ಮಳೆ ಸುರಿಯಲು ವನವು ಹಾಳಾಗುವುದು, ಪಟ್ಟಣವು ನೆಲಸಮವಾಗುವುದು.
20ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ! 33ಅಪಾಯವೂ ಮುಂದಿನ ಸಂರಕ್ಷಣೆಯೂ
1ಸೂರೆಯಾಗದಿದ್ದರೂ ಸೂರೆಮಾಡಿದಿ!ಬಾಧೆಪಡದಿದ್ದರೂ ಬಾಧಿಸಿದಿ!
ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ.
ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.
2ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ.ಪ್ರತಿಮುಂಜಾನೆಯೂ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.
3ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು.
4ನಿಮ್ಮ ಕೊಳ್ಳೆಯು ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು. 5ಯೆಹೋವನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಣ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.
6ಜ್ಞಾನವೂ, ತಿಳಿವಳಿಕೆಯೂ,ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವುದು.
7ಇಗೋ, ಅವರ ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ, ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.8ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ;ಶತ್ರುವು ಒಪ್ಪಂದವನ್ನು ಮೀರಿದ್ದಾನೆ, ಪಟ್ಟಣಗಳನ್ನು ತಿರಸ್ಕರಿಸಿದ್ದಾನೆ, ಯಾವ ಮನುಷ್ಯರನ್ನೂ ಗಣನೆಗೆ ತಾರನು.
9ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ,ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.
10ಯೆಹೋವನು ಹೀಗೆನ್ನುತ್ತಾನೆ, <<ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
11ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ. ನಿಮ್ಮ ಉಸಿರೇ ನಿಮ್ಮನ್ನು ನುಂಗುವ ಜ್ವಾಲೆಯಾಗುವುದು.
12ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಹಚ್ಚಿದಂತಾಗುವುದು. 13ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸಮೀಪದಲ್ಲಿರುವವರೇ, ನನ್ನ ಪರಾಕ್ರಮವನ್ನು ತಿಳಿದುಕೊಳ್ಳಿರಿ.ಯೆಹೋವನ ರಕ್ಷಣೆಯನ್ನು ಹೊಂದತಕ್ಕವರು
14<<ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ,ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು>> ಎಂದುಕೊಳ್ಳುತ್ತಾರೆ.
15ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು,ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.
16ಇವನಿಗೆ ಗಿರಿದುರ್ಗಗಳೇ, ಆಶ್ರಯಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.
ಯೆರೂಸಲೇಮಿನ ಮುಂದಿನ ಸುಸ್ಥಿತಿ
17ನೀವು ಭೂಷಿತ ರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ನೀವು ಕಣ್ಣು ತುಂಬಾ ನೋಡುವಿರಿ.18ಆಗ ನೀವು ಹಿಂದಿನ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ, <<ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?>> ಎಂದುಕೊಳ್ಳುವಿರಿ.
19ನಿಮಗೆ ತಿಳಿಯದ ಅನ್ಯಭಾಷೆಯನ್ನೂ, ನೀವು ಗ್ರಹಿಸಲಾರದ ತೊದಲು ಮಾತುಗಳನ್ನೂ ಆಡುವ ಆ ಕ್ರೂರ ಜನರನ್ನು ಇನ್ನು ಮುಂದೆ ನೋಡುವುದಿಲ್ಲ. 20ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ,ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ,
ಗೂಟಕೀಳದ, ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ.
21ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು.ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ.
22ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು. 23ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ.ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.
24ಚೀಯೋನಿನ ಯಾವ ನಿವಾಸಿಯೂ <<ನಾನು ಅಸ್ವಸ್ಥನು>> ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.
34ಯೆಹೋವನು ಜನಾಂಗಗಳನ್ನು ದಂಡಿಸುವುದು
1ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.
2ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ. 3ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗುವವು.
4ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು. 5ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.
6ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ. 7ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಮತ್ತು ಹೋರಿಗೂಳಿಗಳೂ ಹತವಾಗುವವು. ಆ ದೇಶವು ರಕ್ತದಿಂದ ತೊಯಿದಿರುವುದು, ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು. 8ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.
9ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು.
10ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು. 11ಆದರೆ ಕಾಡಿನ ಪಕ್ಷಿಗಳು, ಪ್ರಾಣಿಗಳು ಅಲ್ಲಿ ವಾಸಿಸುವವು. ಗೂಬೆ ಮತ್ತು ಕಾಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ನಾಶ ಎಂಬ ನೂಲನ್ನೂ ಪಾಳು ಎಂಬ ಮಟ್ಟಗೋಲನ್ನೂ ಎಳೆಯುವನು.
12ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕುವುದಿಲ್ಲ; ದೇಶದಲ್ಲಿ ಪ್ರಧಾನರೇ ಇಲ್ಲದಂತಾಗುವರು. 13ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು.
14ಕಾಡುಮೃಗಗಳು ಮತ್ತು ನರಿಗಳು ಅಲ್ಲಿ ಸಂಧಿಸುವವು, ಕಾಡಿನ ಆಡುಗಳು ತನ್ನ ಜೊತೆಯನ್ನು ಕೂಗುವುದು, ಭೂತ ಪ್ರೇತಗಳು ಅಲ್ಲಿ ಹಾಯಾಗಿ ವಿಶ್ರಮಿಸಿಕೊಂಡು, ಆಸರೆಯನ್ನು ಕಂಡುಕೊಳ್ಳುವುದು.
15ಅಲ್ಲಿ ಗೂಬೆಯೂ ಗೂಡನ್ನು ಮಾಡಿಕೊಂಡು ಮೊಟ್ಟೆಯಿಟ್ಟು, ಮರಿಮಾಡಿ ಮರೆಯಲ್ಲಿ ಕೂಡಿಸಿಕೊಳ್ಳುವುದು. ಹೌದು, ಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವವು. 16ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ, ಜೊತೆಯಿಲ್ಲದೆ ಒಂದೂ ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು.
17ಆತನೇ ಇವುಗಳಿಗೆ ಪಾಲು ಮಾಡಿಕೊಟ್ಟಿದ್ದಾನೆ. ಆತನ ಕೈಯೇ ಗೆರೆ ಹಾಕಿ ದೇಶವನ್ನು ಹಂಚಿಕೊಟ್ಟಿದೆ. ಅದು ಇವುಗಳಿಗೆ ನಿತ್ಯ ಸ್ವಾಸ್ತ್ಯವಾಗುವುದು, ಅವು ತಲಾತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು. 35ಇಸ್ರಾಯೇಲಿನ ಮುಂದಿನ ಸೌಭಾಗ್ಯ
1ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿತಾವರೆಯಂತೆ ಕಳಕಳಿಸುವುದು.
2ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ,ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು;
ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.
3ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.
4ಭಯಭ್ರಾಂತ ಹೃದಯದವರಿಗೆ, <<ಬಲಗೊಳ್ಳಿರಿ, ಹೆದರಬೇಡಿರಿ!ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ,
ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು>> ಎಂದು ಹೇಳಿರಿ.
5ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.
6ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು,ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.
7ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು;ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು.
8ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು.ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
9ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ.ಬಿಡುಗಡೆಯಾದವರೇ ಅಲ್ಲಿ ನಡೆಯುವರು.
10ಯೆಹೋವನು ವಿಮೋಚಿಸಿದವರು ಹಿಂದಿರುಗಿ,ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು.
ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.
36ಸನ್ಹೇರೀಬನು ಯೆರೂಸಲೇಮನ್ನು ಮುತ್ತಿದ್ದು
1ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದೊಳಗೆ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.2ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬುವವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಅಗಸರ ಹೊಲದ ಕಡೆಯಿಂದ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.3ಆ ಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಬಂದರು.4ರಬ್ಷಾಕೆಯು ಅವರಿಗೆ, <<ನೀವು ಹೋಗಿ, ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ, <ಈ ನಿನ್ನ ಭರವಸೆಗೆ ಯಾವ ಆಧಾರವುಂಟು?5ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿ ಮಾತೇ ಎಂದು ನಾನು ಹೇಳಬಲ್ಲೆ, ನೀನು ಯಾರನ್ನು ನಂಬಿಕೊಂಡು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದೀ?6<<ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಆಧಾರ ಮಾಡಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವುದು.7ಒಂದು ವೇಳೆ ನೀನು, <ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ> ಎಂದು ಹೇಳಬಹುದು. ಹಿಜ್ಕೀಯನು, <ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು> ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!8<<ಆದುದರಿಂದ ಈಗ ನನ್ನ ಒಡೆಯನಾದ ಅಶ್ಶೂರದ ಅರಸನಿಗೆ ಸವಾಲು ಹಾಕುವುದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?9<<ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ.10ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? <ಇಲ್ಲಿಗೆ ಬಂದು ಇದನ್ನು ಹಾಳು ಮಾಡಿಬಿಡು> ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಎನ್ನುವ ಅರಸನ ಮಾತುಗಳನ್ನು ತಿಳಿಸಿರಿ>> ಎಂದು ಹೇಳಿದನು.11ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, <<ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ>> ಎಂದು ಹೇಳಿದರು.12ಅದಕ್ಕೆ ರಬ್ಷಾಕೆಯು, <<ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಈ ಮಾತುಗಳನ್ನು ಹೇಳುವುದಕ್ಕೆ ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನ್ನ ವಿರುದ್ಧವಾಗಿ ನಿಂತರೆ ನಿಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು>> ಎಂದು ಉತ್ತರಕೊಟ್ಟನು.13ಆಮೇಲೆ ರಬ್ಷಾಕೆಯು ಎದ್ದು ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ, <<ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.14ಅರಸನು ನಿಮಗೆ, <ಹಿಜ್ಕೀಯನಿಂದ ಮೋಸ ಹೋಗಬೇಡಿರಿ. ಅವನು ನಿಮ್ಮನ್ನು ಬಿಡಿಸಲಾರನು.>15ಹಿಜ್ಕೀಯನು ನಿಮಗೆ, <ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೋ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ> >> ಎಂಬುದಾಗಿ ಹೇಳಿದರೆ,16ಹಿಜ್ಕೀಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶ್ಶೂರದ ಅರಸನು ಹೇಳುವುದೇನೆಂದರೆ, <<ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು.17ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.>>18<<ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?19ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಯಿಂದ ತಪ್ಪಿಸಿದವೋ?20ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ>> ಎಂದು ಹೇಳಿದನು.21ಆ ಸೇನಾಧಿಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು, ಏನು ಹೇಳಲಿಲ್ಲ.22ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
37ಹಿಜ್ಕೀಯನು ದೇವರಾಲೋಚನೆ ವಿಚಾರಿಸಿದ್ದು
1ಆಗ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.2ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, <<ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ>> ಎಂದು ಆಜ್ಞಾಪಿಸಿದನು.3ಆಗ ಅವರು ಯೆಶಾಯನಿಗೆ, <<ಹಿಜ್ಕೀಯನು ಹೀಗೆ ಹೇಳುತ್ತಾನೆ, <ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.4ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು> >> ಎಂದು ಹೇಳಿದರು.5ಯೆಶಾಯನು ಅರಸನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ,6<<ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ, ಅವುಗಳಿಗೆ ನೀನು ಹೆದರಬೇಡ.7ಇಗೋ, ನಾನು ಅವನ ಮೇಲೆ ಭಯದ ಆತ್ಮವನ್ನು ಬರ ಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ, ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ>> ಎಂಬುದಾಗಿ ಉತ್ತರಕೊಟ್ಟನು.8ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನವನ್ನು ಕೇಳಿ ಲಿಬ್ನಕ್ಕೆ ಹೋಗಿ, ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣದ ವಿರುದ್ಧವಾಗಿ ಯುದ್ಧಮಾಡುತ್ತಾ ಇದ್ದನು.9ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನ್ನ ವಿರುದ್ಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನಾದ ಸನ್ಹೇರೀಬನು ಕೇಳಿ, ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿ,10<<ಹಿಜ್ಕೀಯನೇ, ನೀನು ನಂಬುವ ದೇವರು, <ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವುದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.>11ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ? ಹೀಗಿದ್ದ ಮೇಲೆ ನೀನು ಉಳಿಯುವಿಯೋ?12ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?13ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ>> ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.ಹಿಜ್ಕೀಯನ ಪ್ರಾರ್ಥನೆ
14ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.15ಹಿಜ್ಕೀಯನು ಯೆಹೋವನನ್ನು ಕುರಿತು16<<ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.17ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.18ಯೆಹೋವನೇ, ಅಶ್ಶೂರದ ಅರಸರು ಸಕಲ ಜನಾಂಗಗಳನ್ನೂ, ಅವರ ದೇಶಗಳನ್ನೂ ಹಾಳು ಮಾಡಿದ್ದು ನಿಜ.19ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.20ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.>>ಯೆಶಾಯನ ಮೂಲಕ ಬಂದ ದೈವೋಕ್ತಿ
21ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, <<ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು, <ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.>22ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, <ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.23ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!>24ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, <ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.25ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ> ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ.26ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.27ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು.28ನೀನು ಕುಳಿತುಕೊಳ್ಳುವುದೂ, ಹೊರಗೆ ಹೋಗುವುದೂ, ಒಳಗೆ ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಶನಾಗಿರುವುದನ್ನೂ ಬಲ್ಲೆನು.29ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು>> ಎಂಬುದಾಗಿ ಹೇಳಿದ್ದಾನೆ.30ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.31ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.32ಯೆರೂಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.33ಆತನು ಅಶ್ಶೂರದ ಅರಸನನ್ನು ಕುರಿತು, <<ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ.34ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವುದೇ ಇಲ್ಲ.35ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು>> ಎಂದು ಹೇಳುತ್ತಾನೆ ಎಂಬುದೇ.ಸನ್ಹೇರೀಬನ ಅಪಜಯವೂ ಮರಣವೂ
36ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.37ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.38ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.
38ಹಿಜ್ಕೀಯನ ರೋಗನಿವಾರಣೆ
1ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, <<ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ>> ಎಂದು ಹೇಳಿದನು.2ಇದನ್ನು ಕೇಳಿದೊಡನೆ ಹಿಜ್ಕೀಯನು ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವನನ್ನು ಪ್ರಾರ್ಥಿಸಿದನು.3ಹಿಜ್ಕೀಯನು, <<ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ>> ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.4ಆಗ ಯೆಹೋವನು ಯೆಶಾಯನಿಗೆ,5<<ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, <ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.6ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುವೆನು, ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು.7ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬುದಕ್ಕೆ ಒಂದು ಗುರುತನ್ನು ಕಾಣುವಿ.8ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡುವೆನು> ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬುದಾಗಿ ತಿಳಿಸು>> ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂತು.9ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಆರೋಗ್ಯವನ್ನು ಹೊಂದಿದ ನಂತರ ಬರೆದದ್ದು.
10ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು,<<ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು.
11ನಾನು ಇನ್ನು ಜೀವಲೋಕದವನಾಗಿ ಯೆಹೋವನ ದರ್ಶನವನ್ನು ಹೊಂದಿದೆನಲ್ಲಾ,ಇನ್ನು ಭೂಲೋಕ ನಿವಾಸಿಗಳಲ್ಲಿ ಒಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನು.
12ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು, ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ.ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ,
ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.
13ನಾನು ಬೆಳಗಿನ ತನಕ ಕೂಗಿಕೊಂಡೇ ಇದ್ದೆನು.ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ,
ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು.
14ನಾನು ಬಾನಕ್ಕಿಯಂತೆಯೂ, ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು,ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಆಶ್ರಯವಾಗು ಎಂದು ನಿನ್ನನು ದೃಷ್ಟಿಸುತ್ತಾ ಕಂಗೆಟ್ಟೆನು.
15ನಾನು ಏನು ಹೇಳಲಿ! ಆತನು ನನಗೆ ಮಾತುಕೊಟ್ಟು ಅದರಂತೆ ತಾನೇ ನೆರವೇರಿಸಿದ್ದಾನೆ!ನನ್ನ ಆತ್ಮಕ್ಕೆ ಸಂಭವಿಸಿದ ದುಃಖವನ್ನು ಸ್ಮರಿಸುತ್ತಾ ನನ್ನ ಜೀವಮಾನದಲ್ಲೆಲ್ಲಾ ಮೆಲ್ಲಗೆ ನಡೆಯುವೆನು.
16ಯೆಹೋವನೇ, ಇಂಥಾ ಸಂಭವಗಳಿಂದ ಮನುಷ್ಯರು ಬದುಕುತ್ತಾರೆ.ಅವುಗಳಿಂದಲೇ ನನ್ನ ಆತ್ಮವು ಜೀವಿಸುತ್ತದೆ. ಈಗ ನನ್ನನ್ನು ಸ್ವಸ್ಥಮಾಡಿ ಬದುಕುವಂತೆ ಮಾಡಿದೆ.
17ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು,ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ.
ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.
18ಪಾತಾಳದವರು ನಿನ್ನನ್ನು ಸ್ತುತಿಸುವುದಿಲ್ಲ, ಸತ್ತವರು ನಿನ್ನನ್ನು ಕೀರ್ತಿಸುವುದಿಲ್ಲ,ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯ ಸಂಧತೆಯನ್ನು ಆಶ್ರಯಿಸುವುದಿಲ್ಲ.
19ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು.ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.
20ಯೆಹೋವನು ನನಗೆ ರಕ್ಷಣಾಪರನಾಗಿದ್ದಾನೆ.ನಮ್ಮ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ನಮ್ಮ ಕಿನ್ನರಿ ವೀಣೆಗಳನ್ನು ನುಡಿಸುವೆವು.>>
21ಯೆಶಾಯನು, <<ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು>> ಎಂದು ಅಪ್ಪಣೆಕೊಟ್ಟನು.22 ಹಿಜ್ಕೀಯನು, <<ನಾನು ಗುಣಹೊಂದಿ ಯೆಹೋವನ ಆಲಯವನ್ನು ಸೇರುವೆನೆಂಬುದಕ್ಕೆ ಗುರುತೇನು?>> ಎಂದು ಕೇಳಿದ್ದನು.
39ಬಾಬೆಲಿನ ಬಂದ ದೂತರು
1ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬುವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.2ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದುದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.3ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, <<ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?>> ಎಂದು ಕೇಳಲು ಅವನು, <<ಅವರು ಬಹುದೂರ ದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು>> ಎಂದು ಉತ್ತರಕೊಟ್ಟನು.4ಯೆಶಾಯನು ತಿರುಗಿ ಹಿಜ್ಕೀಯನಿಗೆ, <<ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?>> ಎಂದು ಕೇಳಲು ಅವನು, <<ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರುವುದಿಲ್ಲ>> ಎಂದನು.5ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನಿಗೆ, <<ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳು.6ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲೇನೂ ಉಳಿಯುವುದಿಲ್ಲ.7<<ಬಾಬೆಲಿನ ಅರಸನು ಬಂದು, ನೀನು ಪಡೆದ ಮಕ್ಕಳನ್ನು ತೆಗೆದುಕೊಂಡು ಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಅನ್ನುತ್ತಾನೆ>> ಎಂದು ಹೇಳಿದನು.8<<ಹೇಗೂ ನನ್ನ ಜೀವಮಾನದಲ್ಲಿ ತಪ್ಪದೆ ಸೌಭಾಗ್ಯವಿರುವುದು>> ಎಂದುಕೊಂಡು ಹಿಜ್ಕೀಯನು ಯೆಶಾಯನಿಗೆ, <<ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ>> ಎಂದು ಉತ್ತರಕೊಟ್ಟನು.
40ದೇವಜನರಿಗೆ ಸಂತೈಯಿಸುವಿಕೆ
1<<ನನ್ನ ಸಂತೈಸಿರಿ, ಸಂತೈಸಿರಿ>> ಎಂದು ನಿಮ್ಮ ದೇವರು ಹೇಳುತ್ತಾನೆ.
2ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ;ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು,
ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.
3ಇಗೋ ಒಂದು ವಾಣಿ!<<ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ,
ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ>>
4ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು,ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು.
5ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ. 6ಆಹಾ, ವಾಣಿಯು ಮತ್ತೆ ಕೇಳಿಸಿ, <<ಕೂಗು ಎನ್ನುತ್ತದೆ>> ಅದಕ್ಕೆ ನಾನು, <<ಏನು ಕೂಗಲಿ?>> ಎಂದು ಕೇಳಲು,<<ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.
7ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು!
8ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು>> ಎಂದು ಉತ್ತರವಾಯಿತು. 9ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು;ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ,
ಯೆಹೂದದ ಪಟ್ಟಣಗಳಿಗೆ, <<ಇಗೋ, ನಿಮ್ಮ ದೇವರು!
10ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ,ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.
11ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು,ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು>> ಎಂದು ಸಾರು.
ಯೆಹೋವನ ಅಸಮಾನವಾದ ಮಹಿಮೆ
12ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು?ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ,
ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?
13ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು?
14ಆತನು ಯಾರ ಆಲೋಚನೆಯನ್ನು ಕೇಳಿದನು? ಯಾರು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು?ಯಾರು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕ ಮಾರ್ಗವನ್ನು ತೋರಿಸಿದವನು?
15ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ.ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.
16(ಆತನಿಗರ್ಪಿಸತಕ್ಕ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು,ಅಲ್ಲಿನ ಪ್ರಾಣಿಗಳು ಸರ್ವಾಂಗಹೋಮಗಳಿಗೆ ಸಾಲದು.
17ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ. 18ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?
19ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ,ಬೆಳ್ಳಿಯ ಸರಪಣಿಗಳನ್ನು ಹಾಕುವನು.
20(ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು,ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.
21ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ?ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ?
22ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ;ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.
23ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.
24ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ,ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.
25ಹೀಗಿರಲು, <<ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?>> ಎಂದು ಸದಮಲಸ್ವಾಮಿಯು ಕೇಳುತ್ತಾನೆ.
26ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು?ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ;
ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.
ಯೆಹೋವನು ಬಳಲಿದವರನ್ನು ಬಲಪಡಿಸುವುದು
27ಯಾಕೋಬೇ, ಇಸ್ರಾಯೇಲೇ,<<ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ>> ಎಂದು ಏಕೆ ಅಂದುಕೊಳ್ಳುತ್ತೀ?
28ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ?ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ.
ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.
29ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.
30ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.
31ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು;ಅವರು ಓಡಿ ದಣಿಯರು, ನಡೆದು ಬಳಲರು.
41ಇಸ್ರಾಯೇಲರಿಗೆ ಯೆಹೋವನ ಸಹಾಯ
1ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ;ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗೋಣ.
2ಮೂಡಣದಿಂದ ಒಬ್ಬನನ್ನು ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು,ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ,
ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು.
3ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಮುಂದೆ ಹಾದು ಹೋಗುವಂತೆ ಅವರನ್ನು ಹಿಂದಟ್ಟುತ್ತಾ ಹೋದನು.
4ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.
5ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂಮಿಯ ಕಟ್ಟ ಕಡೆಯವರು ನಡುಗಿದರು,ಎಲ್ಲರೂ ನೆರೆದು ಬಂದರು.
6ಒಬ್ಬರಿಗೊಬ್ಬರು ಸಹಾಯಮಾಡಿದರು, ಪ್ರತಿಯೊಬ್ಬನು ತನ್ನ ಸಹೋದರನಿಗೆ, <<ಧೈರ್ಯವಾಗಿರು>> ಎಂದು ಹೇಳಿದನು.
7ಹಾಗೆಯೇ ಶಿಲ್ಪಿಯು ಎರಕದವನನ್ನೂ, ಸುತ್ತಿಗೆಯಿಂದ ಸಮಮಾಡುವವನು ಅಡಿಗಲ್ಲಿನ ಮೇಲೆ ಕುಟ್ಟುವವನನ್ನೂ ಪ್ರೋತ್ಸಾಹಗೊಳಿಸಿದರು.<<ಬೆಸಿಗೆ ಚೆನ್ನಾಗಿದೆ>> ಎಂದು ಹೇಳಿ ವಿಗ್ರಹವನ್ನು ಕದಲದಂತೆ ಮೊಳೆಗಳಿಂದ ಜಡಿದರು.
ಇಸ್ರಾಯೇಲನ್ನು ಧೈರ್ಯಗೊಳಿಸುವ ವಾಗ್ದಾನಗಳು
8ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ,ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,
9ನಾನು ಭೂಮಿಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, <<ನೀನು ನನ್ನ ಸೇವಕನು,ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ>> ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ,
10ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು.ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
11ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು,ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.
12ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು.ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ನಿರ್ನಾಮವಾಗುವರು.
13ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ.<<ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.
14ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ,ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು>> ಎಂದು ಯೆಹೋವನು ಹೇಳುತ್ತಾನೆ.
15<<ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ,ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ.
16ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು.ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.
17ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು,ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.
18ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ,ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು.
19ಮರುಭೂಮಿಯಲ್ಲಿ ದೇವದಾರು, ಜಾಲಿಮರ, ಸುಗಂಧ ಒಲೀವ್ ಮರಗಳನ್ನು ನಾನು ನೆಡುವೆನು.ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
20ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ>> ಎಂದುಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು.
ದೇವತೆಗಳಿಗೆ ಕಾಲಜ್ಞಾನವಿಲ್ಲದಿರುವುದು
21ಯಾಕೋಬ್ಯರ ಅರಸನಾದ ಯೆಹೋವನು ಹೀಗೆನ್ನುತ್ತಾನೆ,<<ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ವಿಗ್ರಹಗಳಿಗಾಗಿ ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ>>
22ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ;ನಡೆದ ಸಂಗತಿಗಳ ವಿಶೇಷವನ್ನು ಸೂಚಿಸಿರಿ,
ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಇಲ್ಲವೇ ಭವಿಷ್ಯತ್ತನ್ನು ತಿಳಿಸಿದರೆ ಗ್ರಹಿಸುವೆವು.
23ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಆಗುವವುಗಳನ್ನು ತಿಳಿಸಿರಿ.ನಾವು ಒಟ್ಟಿಗೆ ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ.
24ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮೊರೆಹೋಗುವವರು ತುಚ್ಛರೇ ಸರಿ! 25ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ.ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು.
26ಕಾರ್ಯವು ನಡೆಯುವುದಕ್ಕೆ ಮೊದಲು ಇವರಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಸಮಯಕ್ಕೆ ಮೊದಲೇ <<ಅವನು ಸತ್ಯವಂತನು>> ಎಂದು ಯಾರು ಮುಂತಿಳಿಸಿದ್ದಾರೆ?ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ.
27ನಾನು ಮೊದಲನೆಯವನಾಗಿ ಚೀಯೋನಿಗೆ, <<ಇಗೋ, ಅವರನ್ನು ನೋಡು>> ಎಂದು ಹೇಳಿ ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.
28ನಾನು ನೋಡಿದಾಗ ಇವರಲ್ಲಿ ಸಮರ್ಥರು ಯಾರೂ ಇಲ್ಲ.ನಾನು ಪ್ರಶ್ನೆ ಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ.
29ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ,ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ.
42ಯೆಹೋವನ ಸೇವಕನ ಗುಣಲಕ್ಷಣಗಳೂ ಕರ್ತವ್ಯವೊ
1ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು.ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
2ಇವನು ಕೂಗಾಡುವುದಿಲ್ಲ, ಆರ್ಭಟಿಸುವುದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವುದಿಲ್ಲ. 3ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ,ಸದ್ಧರ್ಮವನ್ನು ಪ್ರಚುರಪಡಿಸಿ ಸಿದ್ಧಿಗೆ ತರುವನು.
4ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ,ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು.
ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.
5ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ,ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು,
ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,
6<<ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು,ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
7ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ,ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.
8ನಾನೇ ಯೆಹೋವನು; ಇದೇ ನನ್ನ ನಾಮವು;ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.
9ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ,ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ.
ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.>>
ಯೆಹೋವನ ರಕ್ಷಣಾಸಂಕಲ್ಪ
10ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ,ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.
11ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ,ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.
12ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.
13ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು.ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.
14ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿ ಹಿಡಿದಿದ್ದೆನು.ಈಗ ಹೆರುವವಳಂತೆ ಕೂಗುವೆನು. ನಿಟ್ಟುಸಿರಿನೊಡನೆ ಏದುವೆನು.
15ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ,ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು.
16ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು,ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು.
ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.
17ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, <<ನೀವೇ ನಮ್ಮ ದೇವರುಗಳು>> ಎಂದುಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.
ಯೆಹೋವನ ಸೇವಕನ ಈಗಿನ ದುಸ್ಥಿತಿ ಹಾಗು ಮುಂದಿನ ಉದ್ಧಾರ
18ಕಿವುಡರೇ, ಕೇಳಿರಿ! ಕುರುಡರೇ, ನೀವು ಕಣ್ಣಿಟ್ಟು ನೋಡಿರಿ!
19ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು?ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು?
20ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು.
21ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು. 22ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ.ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು,
ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.
23ನಿಮ್ಮಲ್ಲಿ ಯಾರು ಈ ಮಾತಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಆಲಿಸಿ ಕೇಳುವರು?
24ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು?ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ.
ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ
25ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು.ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.
43ಇಸ್ರಾಯೇಲರ ರಕ್ಷಕನು
1ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ,<<ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.
2ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು,ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.
3ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು.ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.
4ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ,ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.
5ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ;ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.
6<ಅವರನ್ನು ಒಪ್ಪಿಸಿಬಿಡು> ಎಂದು ಉತ್ತರದಿಕ್ಕಿಗೂ <ತಡೆಯಬೇಡ> ಎಂದು ದಕ್ಷಿಣಕ್ಕೂ ಹೇಳಿ,ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,
7ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.ಇಸ್ರಾಯೇಲ್ ಯೆಹೋವನ ಸಾಕ್ಷಿ
8ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ.
9ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು?ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ.
ಆ ಸಾಕ್ಷಿಗಳು ಇವರ ಮಾತನ್ನು ಕೇಳಿ <ಇದು ನಿಜ> ಎಂದು ಹೇಳಲಿ.
10ಯೆಹೋವನ ಮಾತೇನೆಂದರೆ, <ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು.ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು.
ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.
11ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ. 12ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ;ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು.
13ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ.ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?> >> ಎಂಬುದೇ ಯೆಹೋವನ ಮಾತು.
ಬಾಬೆಲೋನಿಗೆ ಸಮೀಪಿಸಿರುವ ನಾಶನ
14ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ,<<ನಾನು ನಿಮಗೋಸ್ಕರ ದೂತನನ್ನು ಬಾಬೆಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.
15ನಾನು ಯೆಹೋವನು, ನಿಮ್ಮ ಸದಮಲಸ್ವಾಮಿಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ. 16ಯಾರು ಸಮುದ್ರದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ,
17ಯಾರು ರಥಗಳನ್ನು, ಕುದರೆಗಳನ್ನು, ಸೈನ್ಯಗಳನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ,ಅವು ಬಿದ್ದು ಏಳಲಾರದಂತೆಯೂ, ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದವನು>> ಯೆಹೋವನು ಹೀಗೆನ್ನುತ್ತಾನೆ,
18ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ.
19ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ?ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.
20ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ.ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು.
ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ,
21ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.ಇಸ್ರಾಯೇಲಿನ ಉದಾಸೀನತೆ
22<<ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದಿ.
23ನೀನು ನನಗೆ ಹೋಮಕ್ಕಾಗಿ ಕುರಿ ಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ. ಕಾಣಿಕೆಗಳನ್ನು ಕೇಳಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ. 24ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ. 25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.
26ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು. 27ನಿನ್ನ ಮೂಲಪಿತೃ ಪಾಪಮಾಡಿದ್ದಾನೆ, ನಿನ್ನ ಬೋಧಕರು ನನಗೆ ದ್ರೋಹಮಾಡಿದ್ದಾರೆ.
28ಆದಕಾರಣ ನಾನು ಪವಿತ್ರಾಲಯದ ಪ್ರಧಾನರನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗೂ ಒಪ್ಪಿಸಿಬಿಟ್ಟಿದ್ದೇನೆ.>>
44ಇಸ್ರಾಯೇಲಿನ ಮುಂದಿನ ವೃದ್ಧಿ
1ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಇಸ್ರಾಯೇಲೇ, ಈಗ ಕೇಳು:
2ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ,<<ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!
3ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು,ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
4ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು. 5(ಅನ್ಯಜನರಲ್ಲಿ) ಒಬ್ಬನು, <ನಾನು ಯೆಹೋವನ ಭಕ್ತನು> ಎಂದು ಹೇಳಿಕೊಳ್ಳುವನು.ಇನ್ನೊಬ್ಬನು, <ನಾನು ಯಾಕೋಬ್ಯನ ಹೆಸರಿನವನು> ಮತ್ತೊಬ್ಬನು ತನ್ನ ಕೈಯ ಮೇಲೆ, <ದಾಸನು> ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.>>
ಯೆಹೋವನು ಇಸ್ರಾಯೇಲಿನ ರಕ್ಷಕ
6ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ,<<ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
7ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ?ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ.
8ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ.ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.>>
ವಿಗ್ರಹಾರಾಧನೆಯ ಮೂಢತನ
9ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ,ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.
10ದೇವತೆಯನ್ನು ರೂಪಿಸುವವರೂ, ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು? 11ವಿಗ್ರಹ ಶರಣರೆಲ್ಲಾ ಆಶಾಭಂಗಪಡುವರು, ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ.ಅವರೆಲ್ಲರು ಒಟ್ಟುಗೂಡಿಕೊಂಡು ನಿಲ್ಲಲಿ. ಅವರು ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು.
12ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ,ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು.
ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು.
13ಬಡಗಿಯು ಮರಕ್ಕೆ ನೂಲು ಹಾಕಿ ಮೊಳೆಯಿಂದ ಗೆರೆಯೆಳೆದುಬಾಚಿಗಳಿಂದ ಕೆತ್ತಿ, ಕೈವಾರದಿಂದ ಗುರುತಿಸಿ,
ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ಮನುಷ್ಯನ ಅಂದದಂತೆ ರೂಪಿಸುವನು.
14ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ, ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು.ವನವೃಕ್ಷಗಳನ್ನು ತನಗೋಸ್ಕರ ಬೆಳೆಯುವನು. ಅವನು ಪೀತದಾರವನ್ನು ನೆಡಲು, ಮಳೆಯು ಅದನ್ನು ಬೆಳೆಸುವುದು.
15ಅದು ಸೌದೆಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು.ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ವಿಗ್ರಹವನ್ನು ಮಾಡಿ ಅದಕ್ಕೆ ಅಡ್ಡಬೀಳುವನು.
16ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು, ಅದರ ಮೇಲೆ ಮಾಂಸವನ್ನು ಸುಡುವನು. ಅದನ್ನು ತಿಂದು ತೃಪ್ತನಾಗುವನು.ತನ್ನನ್ನು ಕಾಯಿಸಿಕೊಳ್ಳುತ್ತಾ, <<ಆಹಾ, ಬೆಂಕಿಯನ್ನು ಕಂಡೆ, ಬೆಚ್ಚಗಾಯಿತು>> ಎಂದುಕೊಳ್ಳುವನು.
17ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ,<<ನೀನೇ ನನ್ನ ದೇವರು, ನನ್ನನ್ನು ರಕ್ಷಿಸು>> ಎಂದು ಪ್ರಾರ್ಥಿಸುವನು.
18ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ. 19<<ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ,ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?>>
ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.
20ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, <<ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ>> ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು. 21ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ.ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.
22ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ,ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.
23ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು.ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ.
ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.
ಯೆಹೋವನ ಸರ್ವಾಧಿಕಾರ
24ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ,<<ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ,
ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.
25ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ,ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.
26ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ.ಯೆರೂಸಲೇಮಿಗೆ, <ನೀನು ಜನ ನಿವಾಸವಾಗುವಿ> ಎಂದು ಯೆಹೂದದ ಪಟ್ಟಣಗಳಿಗೆ, <ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು> ಎಂದು ಮುಂತಿಳಿಸಿ
27ಜಲರಾಶಿಗೆ, <ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು> ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ. 28ಕೋರೆಷನ ವಿಷಯವಾಗಿ, <ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ> ಎಂದು ಹೇಳಿ, <ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು> >> ಎಂಬುದಾಗಿ ಮಾತನಾಡುವವನು ನಾನೇ.
45ಯೆಹೋವನು ಕೋರೆಷನನ್ನು ಕರೆದ ಉದ್ದೇಶ
1ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು,ರಾಜರ ನಡುಕಟ್ಟನ್ನು ಬಿಚ್ಚಿ,
ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,
2<<ನಾನು ನಿನ್ನ ಮುಂದೆ ಹೋಗಿ, ದಿಣ್ಣೆಗಳನ್ನು ಸಮಮಾಡುವೆನು.ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.
3ನಿನ್ನ ಹೆಸರು ಹಿಡಿದು ಕರೆಯುವ ಯೆಹೋವನು ನಾನೇ. ಇಸ್ರಾಯೇಲರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಯನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.
4ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದುಕೊಂಡ ಇಸ್ರಾಯೇಲಿಗಾಗಿಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಬಿರುದನ್ನು ದಯಪಾಲಿಸಿದ್ದೇನೆ.
5ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ.ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.
6ಪೂರ್ವದಿಂದ ಪಶ್ಚಿಮದ ತನಕ ಇರುವವರೆಲ್ಲರೂ ಇದನ್ನು ನೋಡಿ,ನನ್ನ ಹೊರತು ಯಾರೂ ಇಲ್ಲ, ನಾನೇ ಯೆಹೋವನು.
7ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು,ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.
8ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು.ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ,
ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.
ದೇವರ ಮೇಲೆ ಗುಣುಗುಟ್ಟುವವರನ್ನು ಖಂಡಿಸುವುದು
9ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ!ಮಣ್ಣು ಕುಂಬಾರನಿಗೆ, <ನೀನು ಏನು ಮಾಡುತ್ತೀ?> ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, <ಅವನಿಗೆ ಕೈಯಿಲ್ಲ> ಅಂದೀತೇ?
10<ನೀನು ಹುಟ್ಟಿಸುವುದೇನು> ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! <ನೀನು ಹೆರುವುದೇನು> ಎಂದು ಸ್ತ್ರೀಯನ್ನು ಕೇಳುವವನ ಗತಿ ಗತಿಯೇ! 11ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ,<ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.
12ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ.ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.
13ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು.ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು> >> ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.
ಆಫ್ರಿಕ ಖಂಡದ ಕೆಲವು ಜನಾಂಗಗಳು ಇಸ್ರಾಯೇಲಿಗೆ ಅಧೀನವಾಗುವುದು
14ಯೆಹೋವನ ಈ ಮಾತನ್ನು ಕೇಳಿರಿ,<<ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ
ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು
ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು,
<ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.> >>
15ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ. 16ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು.
17ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು.ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.
ಯೆಹೋವನು ದಿಗಂತಗಳವರನ್ನು ತನ್ನ ಕಡೆಗೆ ಕರೆಯುವುದು
18ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು.ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು.
ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು.
ಈತನು ಹೀಗೆನ್ನುತ್ತಾನೆ, <<ನಾನೇ ಯೆಹೋವನು, ಇನ್ನು ಯಾರೂ ಇಲ್ಲ.
19ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ.ಶೂನ್ಯವನ್ನೋ ಎಂಬಂತೆ, <ನನ್ನನ್ನು ಹುಡುಕಿರಿ> ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ.
ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.
20ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ!ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.
21ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ.ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು?
ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.
22ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ.ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ,ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು.
ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.
24ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು.ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.
25ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು>> ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ. 46ಬಾಬೆಲಿನ ಅಶಕ್ತ ದೇವತೆಗಳು ಮತ್ತು ಸರ್ವಶಕ್ತ ಯೆಹೋವ
1ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ,ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.
2ಒಟ್ಟಿಗೆ ಕುಗ್ಗಿ, ಬಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ,ಬಂಧನಕ್ಕೆ ಸ್ವಇಚ್ಛೆಯಿಂದ ಒಳಗಾದವು.
3ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ,ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.
4ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು.ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.
5ನನ್ನನ್ನು ಯಾರಿಗೆ ಸಮಾನ ಎಂದು ತಿಳಿದಿದ್ದೀರಿ? ನಾನು ಯಾರಿಗೆ ಸಮಾನನೆಂದು, ನನ್ನನ್ನು ಯಾರೊಡನೆ ಹೊಲಿಸುತ್ತೀರಿ?
6ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ,ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.
7ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು.ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.
8<<ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ!
9ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ;ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.
10ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. <ನನ್ನ ಸಂಕಲ್ಪವು ನಿಲ್ಲುವುದು,ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು> ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.
11ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ.ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.
12ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.
13ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು,ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.>>
47ಬಾಬೆಲಿನ ಗೀತೆ
1ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ,ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ!
ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.
2ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ,ಈಜಾಡುವ ಬಟ್ಟೆಯ ನೆರಿಗೆಯನ್ನು ಹರಿದುಬಿಟ್ಟು, ಬೆತ್ತಲಾಗಿ ನದಿಗಳನ್ನು ಹಾದುಹೋಗು.
3ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ,ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.
4ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲಿನ ಪರಿಶುದ್ಧನು!
5ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು.ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.
6ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು.ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.
7<<ನಾನು ಶಾಶ್ವತವಾದ ರಾಣಿ>> ಎಂದು ನೀನು ಅಂದುಕೊಂಡುಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.
8<<ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ,ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ>> ಎಂದು
ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
9ಒಂದೇ ದಿನದೊಳಗೆ, ಒಂದು ಕ್ಷಣದಲ್ಲಿ,ಪುತ್ರಶೋಕ ಮತ್ತು ವಿಧವೆಯ ಸ್ಥಿತಿ ಇವೆರಡೂ ನಿನಗುಂಟಾಗುವವು.
ನೀನು ಎಷ್ಟು ಮಾಟಮಾಡಿದರೂ, ಎಷ್ಟೇ ಮಂತ್ರತಂತ್ರಗಳನ್ನು ನಡೆಸಿದರೂ ಇವುಗಳನ್ನು ಸಂಪೂರ್ಣವಾಗಿ ಅನುಭವಿಸುವಿ.
10ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, <<ನನ್ನನ್ನು ಯಾರೂ ನೋಡರು?>> ಎಂದುಕೊಂಡಿದ್ದಿ.ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ,
<<ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ>> ಎಂದು ಯೋಚಿಸಿಕೊಂಡಿದ್ದಿ.
11ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವುದು,ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು.
ನೀನು ತಪ್ಪಿಸಿಕೊಳ್ಳಲಾಗದ ನಾಶನವು ನಿನ್ನ ಮೇಲೆ ಪಕ್ಕನೆ ಬರುವುದು.
12ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ,ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು.
ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.
13ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ.ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ,
ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.
14ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು;ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು;
ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ.
15ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು. ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರ ಮಾಡಿದವರೆಲ್ಲರೂ;ಚದರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರುವುದಿಲ್ಲ.
48ಮೊಂಡರಾದ ಇಸ್ರಾಯೇಲರು
1ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ,ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು,
ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ.
ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.
2ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು,ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ.
ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.
3ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು.ನಾನು ತಟ್ಟನೆ ನಡೆಸಲು ಅವು ನೆರವೇರಿದವು.
4ಏಕೆಂದರೆ ನೀನು ಹಟವಾದಿನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.
5ಆದುದರಿಂದಲೇ, <<ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ>> ಎಂದುನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.
6ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.
7ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, <<ಮೊದಲೇ ನಾನು ತಿಳಿದುಕೊಂಡಿದ್ದೆನು>> ಎಂದು,ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮೊದಲು ನಾನು ನಿನಗೆ ಕೇಳಗೊಡಿಸಲಿಲ್ಲ.
8ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ;ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.
9ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು, ನನ್ನ ಕೀರ್ತಿಗೆ ಕಳಂಕ ಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ಸಹಿಸಿಕೊಳ್ಳುವೆನು.
10ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.
11ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು. ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು?ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.
ಬಾಬೆಲಿನಿಂದ ಬಿಡುಗಡೆ
12ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು,ನಾನೇ ಆದಿಯೂ, ನಾನೇ ಅಂತ್ಯ
13ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು,ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.
14ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು?ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.
15ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು. 16ನನ್ನ ಬಳಿಗೆ ಬಂದು ಇದನ್ನು ಕೇಳಿರಿ,ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ.
ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.
17ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ,<<ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ,
ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.
18ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು!ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.
19ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು.ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.
20ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ!ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ.
<ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ> >> ಎಂದು ಹೇಳಿರಿ.
21ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ;ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು;
ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.
22<<ದುಷ್ಟರಿಗೆ ಸಮಾಧಾನವೇ ಇಲ್ಲ>> ಎಂದು ಯೆಹೋವನು ನುಡಿಯುತ್ತಾನೆ. 49ಯೆಹೋವನ ಸೇವಕನ ಶ್ರೇಷ್ಠ ಕರ್ತವ್ಯ
1ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ!ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
2ನನ್ನ ಬಾಯಿಯನ್ನು ಹದವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ.ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
3ಆತನು ನನಗೆ, <<ನೀನು ನನ್ನ ಸೇವಕನೂ, ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ>> ಎಂದು ಹೇಳಿದನು.
4ಅದಕ್ಕೆ ನಾನು, <<ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ.ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು>> ಎಂದು ಅಂದುಕೊಂಡೆನು.
5ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು.ಯಾಕೋಬ್ಯರನ್ನು ತನ್ನ ಕಡೆಗೆ ಸೇರಿಸಿಕೊಳ್ಳಬೇಕೆಂತಲೂ, ಇಸ್ರಾಯೇಲ್ ತನ್ನ ಕಡೆಗೆ ಕೂಡಿಬರಬೇಕೆಂತಲೂ
ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ.
6ಆತನು ಹೀಗೆನ್ನುತ್ತಾನೆ, <<ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ,ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ.
ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.>>
7ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ,ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ,
<<ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ
ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.>>
ಇಸ್ರಾಯೇಲಿನ ಪುನಃಸ್ಥಾಪನೆ
8ಇದೇ ಯೆಹೋವನ ನುಡಿ,<<ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ.
ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ.
ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.
9ನೀನು ಬಂದಿಸಲ್ಪಟ್ಟವರಿಗೆ <ಹೊರಟುಹೋಗಿರಿ> ಎಂದು, ಕತ್ತಲಲ್ಲಿರುವವರಿಗೆ, <ಬೆಳಕಿಗೆ ಹೊರಡಿರಿ> ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು.ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.
10ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ.ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.
11ನನ್ನ ಬೆಟ್ಟಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು. 12ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
13ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ!ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.>>
14ಚೀಯೋನ್ ನಗರಿಯಾದರೋ, <<ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನೆ>> ಎಂದುಕೊಂಡಳು.
15ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ?ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.
16ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
17ನಿನ್ನ ಮಕ್ಕಳು ತ್ವರೆಪಟ್ಟು ಬರುತ್ತಿದ್ದಾರೆ. ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟು ಹೋಗುತ್ತಾರೆ.
18ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ,<<ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ.
19ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂಮಿಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವುದೆಂದು ನೋಡುವಿ.ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ.
20ಸಂತಾನವನ್ನು ಕಳೆದುಕೊಂಡವಳಾದ ನಿನ್ನ ಮಕ್ಕಳು,<ಸ್ಥಳವು ನನಗೆ ಸಂಕೋಚ, ನಾನು ವಾಸಿಸುವುದಕ್ಕೆ ಸ್ಥಳವಾಗುವಂತೆ ಸರಿದುಕೋ> ಎಂದು ಆಡಿಕೊಳ್ಳುವ ಮಾತು ಇನ್ನು ಮೇಲೆ ನಿನ್ನ ಕಿವಿಗೆ ಬೀಳುವುದು.
21ಆಗ ನೀನು ನಿನ್ನ ಮನದೊಳಗೆ, <ನನಗೋಸ್ಕರ ಇವರನ್ನು ಯಾರು ಹೆತ್ತರು?ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇವರನ್ನು ಸಾಕಿದವರು ಯಾರು?
ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ, ಇವರೆಲ್ಲಿದ್ದರು?> >> ಎಂದುಕೊಳ್ಳುವಿ.
22ಕರ್ತನಾದ ಯೆಹೋವನು ಹೀಗೆನ್ನುತ್ತಾನೆ,<<ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ಧ್ವಜವನ್ನು ಎತ್ತುವೆನು.
ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು.
23ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು.ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು.
ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ>> ಎಂದು ನಿನಗೆ ಗೊತ್ತಾಗುವುದು.
24ಶೂರನಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯಾದವರನ್ನು ಬಿಡಿಸಬಹುದೋ?
25ಯೆಹೋವನು ಹೀಗೆನ್ನುತ್ತಾನೆ,<<ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು.
ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.
26ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು.ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು>> ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.
501ಯೆಹೋವನು ಹೀಗೆನ್ನುತ್ತಾನೆ,<<ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ?
ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ?
ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.
2ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ?ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ?
ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ.
ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.
3ನಾನು ಆಕಾಶಕ್ಕೆ ಅಂಧಕಾರವನ್ನು ಹೊದಿಸಿ, ಗೋಣಿತಟ್ಟಿನ ಮುಸುಕನ್ನು ಹಾಕುತ್ತೇನೆ.>>ಯೆಹೋವನ ಸೇವಕನ ಭರವಸೆ
4ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ.
ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.
5ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ.ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.
6ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು.ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.
7ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ;ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು.
8ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ.ನನಗೆ ಪ್ರತಿಕಕ್ಷಿಯು ಯಾರು? ಅವನು ನನ್ನ ಬಳಿಗೆ ಬರಲಿ.
9ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು?ಇಗೋ, ಅವರೆಲ್ಲರೂ ಹಳೆಯ ವಸ್ತ್ರದಂತಾಗುವರು. ಅವರನ್ನು ನುಸಿಯು ತಿಂದುಬಿಡುವುದು.
10ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು?ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು?
ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.
11ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ,ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ.
ಇಗೋ, <<ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.>>
51ಚೀಯೋನಿಗೆ ಶಾಶ್ವತವಾದ ರಕ್ಷಣೆ
1ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ,ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.
2ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.
3ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ,ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು.
ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.
4<<ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ!ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.
5ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು,ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.
6ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ.ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು.
ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.
7ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ,ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.
8ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು.ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.>>
9ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ!ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ,
ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?
10ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ,ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದವನು ನೀನಲ್ಲವೋ?
11ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು.ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.
12ನಾನೇ, ನಾನೇ ನಿನ್ನನ್ನು ಸಂತೈಸುವವನು.ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?
13ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ?ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ?
ಆ ಹಿಂಸಕನ ಕ್ರೋಧವು ಎಲ್ಲಿ ಇದೆ?
14ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು,ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ.
15ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ,ಸೇನಾಧೀಶ್ವರನಾದ ಯೆಹೋವನೆಂಬುದೇ ನನ್ನ ನಾಮಧೇಯ.
16ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ,ಚೀಯೋನಿಗೆ, <<ನೀವು ನನ್ನ ಜನರು>> ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.
ಯೆಹೋವನ ರೋಷ ಪಾತ್ರೆ
17ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ,ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು!
ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.
18ಅವಳು ಹೆತ್ತ ಮಕ್ಕಳಲ್ಲಿ ಅವಳನ್ನು ನಡೆಸಿಕೊಂಡು ಹೋಗುವವನು ಯಾರೂ ಇಲ್ಲ.ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ.
19ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ?ನಾಶವೋ, ಸಂಹಾರವೋ, ಕ್ಷಾಮವೋ, ಶಕ್ತಿಯೋ.
ನಾನು ನಿನ್ನನ್ನು ಹೇಗೆ ಸಂತೈಸಲಿ?
20ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ.ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.
21ನೀನು ಹಿಂಸೆಗೊಳಗಾಗಿದ್ದಿ. ಕುಡಿದು ಅಮಲೇರಿದ್ದಿ.ಆದರೆ ದ್ರಾಕ್ಷಾರಸದಿಂದಲ್ಲ. ಆದುದರಿಂದ ಈಗ ಇದನ್ನು ಕೇಳು.
22ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ,<<ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು.
ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.
23ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು.ಅವರು ನಿನಗೆ, <ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು> ಎಂದು ಹೇಳಲು,
ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.>>
52ಯೆರೂಸಲೇಮಿನ ಬಿಡುಗಡೆ
1ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ!ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ!
ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.
2ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ!ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ!
3ಯೆಹೋವನ ಈ ಮಾತನ್ನು ಕೇಳಿರಿ, <<ಲಾಭಪಡೆಯದೆ ನಿಮ್ಮನ್ನು ಮಾರಿದೆನು,ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆಮಾಡುವೆನು.>>
4ಕರ್ತನಾದ ಯೆಹೋವನು ಹೀಗೆಂದುಕೊಳ್ಳುತ್ತಾನೆ, <<ನನ್ನ ಜನರು ಮೊಟ್ಟಮೊದಲು ಐಗುಪ್ತದಲ್ಲಿ ಇಳಿದುಕೊಳ್ಳಬೇಕೆಂದು ಹೋಗಿ ಅಲ್ಲಿ ಸೆರೆಯಾದರು.ಅಶ್ಶೂರ್ಯರು ಕಾರಣವಿಲ್ಲದೆ ಅವರನ್ನು ಬಾಧೆಪಡಿಸಿದರು.>>
5ಕರ್ತನಾದ ಯೆಹೋವನು ಹೇಳುವುದೇನೆಂದರೆ, <<ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ.
ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.
6ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದುಕೊಳ್ಳುವರು.ಹೀಗೆ ಆ ದಿನದಲ್ಲಿ ಅವರ ಸಂಗಡ ಮಾತನಾಡಿದವನು ನಾನೇ. ಹೌದು ನಾನೇ>> ಎಂದು ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು.
7ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ!ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, <<ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ>> ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.
8ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು. 9ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ!ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.
10ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ.ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.
11ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ,ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!
12ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ.ಯೆಹೋವನು ನಿಮಗೆ ಮುಂಬಲವಾಗಿ ಮುಂದೆ ಹೋಗುವನು.
ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಕಾಯುವನು.
ಯೆಹೋವನ ಸೇವಕನ ಶ್ರಮೆ, ಪ್ರಾಣತ್ಯಾಗ ಅದರ ಪ್ರತಿಫಲ
13ಇಗೋ, ನನ್ನ ಸೇವಕನು ಕೃತಾರ್ಥನಾಗುವನು.ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.
14ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ,ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ,
ಅನೇಕರು ಹೇಗೆ ಹೆದರಿದರೋ,
15ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು.ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು.
ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.
531ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?
2ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು.ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.
3ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು,ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.
4ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು,ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.
5ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು;ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
6ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು;ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.
7ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ;ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು,
ಬಾಯಿ ತೆರೆಯಲೇ ಇಲ್ಲ.
8ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ.ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?
9ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ,ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.
10ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು,ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು,
ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;
11ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು;ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.
12ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು,ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು,
ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.
54ಚೀಯೋನಿನ ಮುಂದಿನ ವೃದ್ಧಿಯೂ ವೈಭವವೂ
1<<ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು!ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು>> ಎಂದು ಯೆಹೋವನು ಹೇಳುತ್ತಾನೆ.
2ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ;ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು.
3ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು. 4<<ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು;ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.
5<<ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ;ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.
6ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ>> ಎಂಬುದು ನಿನ್ನ ದೇವರ ನುಡಿ. 7<<ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾ ಕೃಪೆಯಿಂದ ಸೇರಿಸಿಕೊಳ್ಳುವೆನು.
8ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು,ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು>> ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.
9<<ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.
10ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ. 11ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ,ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.
12ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ,ನಿನ್ನ ಪೌಳಿಗೋಡೆಯನ್ನು ಮನೋಹರ ರತ್ನಗಳಿಂದ ನಿರ್ಮಿಸುವೆನು.
13ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.
14ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು. 15ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ;ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.
16ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನು ಉಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ,ಹಾಳುಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ.
17ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ.ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ>> ಎಂದು ಯೆಹೋವನು ಅನ್ನುತ್ತಾನೆ.
55ಯೆಹೋವನ ಕರೆ
1<<ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ!ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.
2ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ?ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.
3ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ;ಆಲಿಸಿದರೆ ಬದುಕಿ ಬಾಳುವಿರಿ.
ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ>> ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.
4ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ,ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.
5ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ,ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ
ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.
6ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ,ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
7ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ;ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು;
ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.
8ಯೆಹೋವನು ಹೀಗೆನ್ನುತ್ತಾನೆ, <<ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.
9ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ,ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.
10ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ,ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,
11ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ,ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.
12ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ;ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.
13ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು;ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.>>
56ಸಕಲ ಜನಾಂಗಗಳಿಗೂ ದೇವರ ಆಶೀರ್ವಾದ
1ಯೆಹೋವನು ಹೀಗೆನ್ನುತ್ತಾನೆ, <<ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಆಚರಿಸಿರಿ;ಏಕೆಂದರೆ ನನ್ನ ವಿಮೋಚನಕ್ರಿಯೆಯು ಬೇಗನೆ ಬರುವುದು, ನನ್ನ ರಕ್ಷಣಾಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವುದು.
2ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು,ಸಬ್ಬತ್ ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.
3ಯೆಹೋವನನ್ನು ಅವಲಂಬಿಸಿದ ವಿದೇಶೀಯನು, <ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು> ಎಂದು ಮಾತನಾಡದಿರಲಿ;ಮತ್ತು ನಪುಂಸಕನು, <ಅಯ್ಯೋ, ನಾನು ಗೊಡ್ಡುಮರ> >> ಎಂದು ಅಂದುಕೊಳ್ಳದಿರಲಿ.
4ಯೆಹೋವನು ಹೀಗೆನ್ನುತ್ತಾನೆ, <<ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದುದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ
5ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟುಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು;
ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು.
6ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ
ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ
7ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು;ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು;
ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.
8ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ,<ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು> >> ಎಂಬುದೇ.
ಅಧಿಪತಿಗಳ ಅತ್ಯಾಶೆ, ಜನರ ದೇವದ್ರೋಹ, ಇವುಗಳ ಖಂಡನೆ
9ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವುದಕ್ಕೆ ಬನ್ನಿರಿ!
10ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ;ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.
11ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು.ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ,
ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.
12<<ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ;ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು>> ಎಂದು ಹರಟೆ ಕೊಚ್ಚಿಕೊಳ್ಳುವರು.
571ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ,ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.
2ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ;ನೀತಿಯುಳ್ಳವನಾಗಿ ನಡೆಯುವ ಪ್ರತಿಯೊಬ್ಬನು ತನ್ನ ತನ್ನ ದೀರ್ಘನಿದ್ರಾಸ್ಥಾನದಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾನೆ.
ಇಸ್ರಾಯೇಲಿನ ವಿಗ್ರಹಾರಾಧನೆಯನ್ನು ಖಂಡಿಸಿದ್ದು
3ಮಾಟಗಾತಿಯ ಮಕ್ಕಳೇ,ವ್ಯಭಿಚಾರ ಮತ್ತು ವ್ಯಭಿಚಾರಿಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ!
4ಯಾರನ್ನು ಗೇಲಿಮಾಡಿ ವಿನೋದಪಡುತ್ತೀರಿ?ಯಾರನ್ನು ನೋಡಿ ಬಾಯಿದೆರೆದು ನಾಲಿಗೆಯನ್ನು ಚಾಚುತ್ತೀರಿ?
5ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು,ಕಣಿವೆಗಳಲ್ಲಿಯೂ, ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು
ದ್ರೋಹದ ಸಂತಾನವೂ, ಸುಳ್ಳಿನ ಸಂತತಿಯೂ ಆಗಿದ್ದೀರಿ.
6ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು;ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ.
ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?
7ಮಹೋನ್ನತ ಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದಿ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದಿ.
8ಬಾಗಿಲಿನ ಮತ್ತು ನಿಲುವಿನ ಹಿಂಭಾಗದಲ್ಲಿ ನೀನು ವಿಗ್ರಹವನ್ನು ಇಟ್ಟುಕೊಂಡಿದ್ದಿ;ನನ್ನನ್ನು ಬಿಟ್ಟುಬಿಟ್ಟು, ನಿನ್ನ ಮಂಚದ ಗವಸಣಿಗೆಯನ್ನು ತೆಗೆದು,
ಅದನ್ನು ಹತ್ತಿ ಅದರಲ್ಲಿ ಅನ್ಯರಿಗೆ ಸ್ಥಳಕೊಟ್ಟು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಿ.
ಅವರ ಸಂಗಮವನ್ನು ಆಶಿಸಿ, ನಿನ್ನನ್ನು ತೋರ್ಪಡಿಸಿಕೊಂಡಿದ್ದಿ.
9ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯಾಣಮಾಡಿದ್ದಿ;ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ.
10ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ;ಹೊಸ ಬಲವನ್ನು ತಂದುಕೊಂಡಿ; ಆದುದರಿಂದ ನೀನು ಸೋತುಹೋಗಲಿಲ್ಲ.
11ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ?ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.
12ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ. 13ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ.ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು.
ನನ್ನನ್ನು ಆಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
ಪಶ್ಚಾತ್ತಾಪ ಪಡುವವರಿಗೆ ಕ್ಷಮಾಪಣೆ
14<<ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ;ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ>> ಎಂದು ಒಂದು ವಾಣಿಯು ನುಡಿಯುತ್ತದೆ.
15ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ,<<ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು,
ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.
16ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು,ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.
17ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು,ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು;
ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.
18ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ,ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.>>
19ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, <<ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ,ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು>> ಎಂದು ಹೇಳುತ್ತಾನೆ.
20ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ;ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ.
21<<ದುಷ್ಟರಿಗೆ ಸಮಾಧಾನವೇ ಇಲ್ಲ>> ಎಂದು ನನ್ನ ದೇವರು ನುಡಿಯುತ್ತಾನೆ.
58ನಿಜವಾದ ಉಪವಾಸ
1ಸ್ವರವೆತ್ತಿ ಕೂಗು, ಸಂಕೋಚಪಡಬೇಡ,ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.
2ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ;ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ,
ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.
3<<ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ,ನೀನು ಗಮನಿಸದಿರುವುದೇಕೆ>> ಅಂದುಕೊಳ್ಳುತ್ತಾರೆ.
ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.
4ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.
5ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,?ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು
ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?
6ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು,ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,
7ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು,ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು,
ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
8ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು,ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು,
ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.
9ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, <<ಇಗೋ, ಇದ್ದೇನೆ>> ಅನ್ನುವನು.ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,
10ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ,ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.
11ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ,ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು;
ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.
12ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು.ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ;
<<ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ>>
ಎಂಬ ಬಿರುದುಗಳು ನಿಮಗುಂಟಾಗುವವು.
ಸಬ್ಬತ್ ದಿನದ ಆಚರಣೆ
13ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ,ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ,
ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,
14ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ,ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು.
ಯೆಹೋವನೇ ಇದನ್ನು ನುಡಿದಿದ್ದಾನೆ.
59ರಕ್ಷಣೆಗೆ ಪಾಪವೇ ಅಡ್ಡಿ
1ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.
2ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ;ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.
3ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ;ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.
4ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ;ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.
5ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ;ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು.
6ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು;ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ.
7ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ,ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;
8ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ,ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು.
9ಆದಕಾರಣ ಯೆಹೋವನ ನ್ಯಾಯನಿರ್ಣಯವು ನಮಗೆ ದೂರವಾಗಿದೆ. ಆತನ ರಕ್ಷಣಾಧರ್ಮದ ಕಾರ್ಯವು ನಮಗೆ ಲಭಿಸುವುದಿಲ್ಲ;ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.
10ಕುರುಡರಂತೆ ಗೋಡೆಯನ್ನು ತಡವರಿಸಿ ನಡೆಯುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡಕಾಡುತ್ತೇವೆ,ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ.
11ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ;ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು,
ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.
12ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮ್ಮ ವಿರುದ್ಧವಾಗಿ ಸಾಕ್ಷಿಕೊಡುತ್ತವೆ;ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.
13ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ.ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.
14ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ,ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥತ್ವವು ಪ್ರವೇಶಿಸಲಾರದು.
15ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.ತನ್ನ ಜನರನ್ನು ರಕ್ಷಿಸಲು ಯೆಹೋವನು ಕ್ರಮ ಕೈಗೊಂಡದ್ದು
16ಯೆಹೋವನು ಇವುಗಳನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು;ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಾ ಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.
17ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು;ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.
18ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ,ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು.
19ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.
20<<ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು>>, ಯೆಹೋವನೇ ಇದನ್ನು ನುಡಿದಿದ್ದಾನೆ. 21ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ;<<ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ,
ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ>> ಎಂದು ಯೆಹೋವನು ಹೇಳುತ್ತಾನೆ.
60ಯೆರೂಸಲೇಮಿನ ಮುಂದಿನ ಮಹಾವೈಭವವು
1ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ. 2ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ;ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು.
3ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು. 4ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ;ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.
5ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು;ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು.
6ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು;ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.
7ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು.ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು.
8ಆಹಾ, ದ್ವೀಪನಿವಾಸಿಗಳೂ ನನ್ನನ್ನು ನಿರೀಕ್ಷಿಸುವವರಾಗಿದ್ದಾರೆ!ಮೇಘದೋಪಾದಿಯಲ್ಲಿ ಗೂಡುಗಳಿಗೆ ತ್ವರೆಪಡುವ ಪಾರಿವಾಳಗಳಂತೆ ಹಾರಿ ಬರುತ್ತಿರುವ ಇವರು ಯಾರು?
9ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು,ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ
ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.
10ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು;ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.
11ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು.ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.
12ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.
13ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು;ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.
14ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದುನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.
15ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು,ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.
16ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು;ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.
17ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು;ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇಮಿಸುವೆನು.
18ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ;ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.
19ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ;ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.
20ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು;ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.
21ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ,ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.
22ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು.ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.
61ಚೀಯೋನಿಗೆ ರಕ್ಷಣೆಯ ವಾಗ್ದಾನಗಳು
1ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು;ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
2ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ, 3ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ,ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.
ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
4ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು,ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು.
5ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ಮತ್ತು ತೋಟಗಾರರೂ ಆಗುವರು. 6ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು;ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.
7ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು;ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು.
8ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ.ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.
9ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು.ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.
10ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು.ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ,
ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.
11ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ,ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.
62ಯೆರೂಸಲೇಮಿಗಾಗಿ ಯೆಶಾಯನ ಪ್ರಾರ್ಥನೆ
1ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ,ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.
2ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು;ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು.
3ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ.
4ನೀನು ಇನ್ನು ಮೇಲೆ <<ತ್ಯಜಿಸಲ್ಪಟ್ಟವಳು>> ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ <<ನಿರ್ಜನ ಪ್ರದೇಶ>> ಎಂಬ ಹೆಸರು ಇನ್ನು ಇರದು;ನೀನು <<ನನ್ನ ಉಲ್ಲಾಸಿನಿ >> ಎನಿಸಿಕೊಳ್ಳುವಿ, ನಿನ್ನ ಸೀಮೆಗೆ <<ವಿವಾಹಿತೆ >> ಎಂಬ ಹೆಸರಾಗುವುದು;
ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.
5ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು;ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.
6ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ;ಅವರು ಹಗಲೂ, ಇರುಳೂ ಮೌನವಾಗಿರರು.
ಯೆಹೋವನನ್ನು ಸ್ಮರಿಸುವವರೇ,
7ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಅತನಿಗೂ ವಿರಾಮ ಇಲ್ಲದಿರಲಿ. 8ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು,<<ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;
9ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು.ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು>> ಎಂದು ಹೇಳಿದ್ದಾನೆ.
10ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ,ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ.
ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!
11<<ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ>>ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.
12ನಿನ್ನ ಜನರು, <<ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು>> ಎಂದು ಅನ್ನಿಸಿಕೊಳ್ಳುವರು, ನಿನಗೋ, <<ಪತಿಯು ವರಿಸಿ, ತ್ಯಜಿಸದ ಪಟ್ಟಣ>> ಎಂದು ಹೆಸರು ಬರುವುದು.
63ಯೆಹೋವನು ಶತ್ರುಗಳನ್ನು ಧ್ವಂಸಮಾಡುವುದು
1ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ,ಎದೋಮಿನ ಬೊಚ್ರದಿಂದ ಬರುವ ಇವನು ಯಾರು?
ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.
2ನಿನ್ನ ಉಡುಪು ಏಕೆ ಕೆಂಪಾಗಿದೆ, ನಿನ್ನ ವಸ್ತ್ರಗಳು ದ್ರಾಕ್ಷಿಯನ್ನು ತುಳಿಯುವವನ ಬಟ್ಟೆಯ ಹಾಗಿರುವುದು ಏಕೆ? 3ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ.ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು;
ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.
4ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು. 5ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು;ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣಾಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.
6ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ,ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.
ಕೃಪಾಕಾರ್ಯಗಳಿಗೆ ಪ್ರಾರ್ಥನೆ
7ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು,ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.
8<<ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು>> ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು. 9ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು;ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.
10ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು. 11ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, <<ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ? 12ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?
13ಸಾಗರದ ತಳಕ್ಕೆ ಅವರನ್ನು ನಡೆಸಿದಾತನು ಎಲ್ಲಿ? ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಅವರು ಮುಗ್ಗರಿಸಲಿಲ್ಲ. 14ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಯೆಹೋವನ ಆತ್ಮವು ಅವರನ್ನು ವಿಶ್ರಾಂತಿಯ ಸ್ಥಾನಕ್ಕೆ ಕರೆತಂದಿತು;ನಿನ್ನ ನಾಮವನ್ನು ಘನಪಡಿಸಿಕೊಳ್ಳುವುದಕ್ಕಾಗಿ ನಿನ್ನ ಜನರನ್ನು ಹೀಗೆ ನಡೆಸಿದಿ.
15ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು;ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ?
ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.
16ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ;ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು;
ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ <ನಮ್ಮ ವಿಮೋಚಕನು> ಅನ್ನಿಸಿಕೊಂಡಿದ್ದಿ.
17ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ?ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.
18ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು;ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ.
19ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.
641ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ!ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು!
2ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ,ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ!
3ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು!
4ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ,ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.
5ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ;ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ?
6ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ;ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.
7ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ;ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.
8ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ;ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.
9ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ. 10ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.
11ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ,ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ.
12ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ?ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?>>
65ನ್ಯಾಯತೀರ್ಪು ಮತ್ತು ರಕ್ಷಣೆ
1<<ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು,ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, <ಇಗೋ, ನಾನಿದ್ದೇನೆ! ನಾನಿದ್ದೇನೆ> ಎನ್ನುತ್ತಿದ್ದೆನು.
2ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನು. 3ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.
4ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ,ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ.
5ಅವರು, <ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ> ಎನ್ನುತ್ತಾ,ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.
6ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿ ತೀರಿಸುವ ತನಕ ಸುಮ್ಮನಿರಲಾರೆನು; ಅದರ ಪ್ರತಿಫಲವನ್ನು ಇವರ ಮಡಿಲಿಗೆ ಹಾಕುವೆನು;
7ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು>> ಎಂದು ಯೆಹೋವನು ಹೇಳುತ್ತಾನೆ. 8ಯೆಹೋವನು ಹೀಗನ್ನುತ್ತಾನೆ, <<ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, <ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ> ಎನ್ನುವಂತೆ,ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,
9ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು,ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.
10ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ,ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು.
11ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ,ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು.
12ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ;ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.>>
13ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, <<ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ;ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ;
ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.
14ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು,ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಹೃದಯದ ಯಾತನೆಯಿಂದ ಗೋಳಾಡುವಿರಿ.
15ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು;ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.
16ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು;
ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು.
ನೂತನ ಸೃಷ್ಟಿ
17<<ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು;ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.
18ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ;ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ,
ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು.
19ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು.ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.
20ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ;ಯುವಕನು ನೂರು ವರ್ಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರ್ಷದೊಳಗೆ ಶಾಪ ತಗಲದು.
21ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು. 22ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು;ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು.
23ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು.ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.
24ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.
25ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು.ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ>> ಎಂದು ಯೆಹೋವನು ಅನ್ನುತ್ತಾನೆ.
66ನ್ಯಾಯತೀರ್ಪು ಮತ್ತು ನಿರೀಕ್ಷೆ
1ಯೆಹೋವನು ಹೀಗೆನ್ನುತ್ತಾನೆ:<<ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ?
ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?
2ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು.ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
3ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ;ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ;
ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;
4ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು;ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ;
ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡರು.>>
5ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ!ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು,
<<ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ>> ಎಂದು ಹೇಳಿದ್ದಾರಲ್ಲಾ;
ಅವರಿಗಂತು ಅವಮಾನವಾಗುವುದು.
6ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ!ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!
7ಆಹಾ, ಬೇನೆ ತಿನ್ನುವುದರೊಳಗೆ ಹೆರಿಗೆಯಾಯಿತು, ಪ್ರಸವವೇದನೆ ಇನ್ನು ಕಾಣದಿರುವಲ್ಲಿ ಗಂಡು ಮಗುವನ್ನು ಹೆತ್ತಳು.
8ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥಾ ಸಂಗತಿಯನ್ನು ಕಂಡವರಾರು?ಒಂದು ದಿನದಲ್ಲಿ ರಾಷ್ಟ್ರವು ಹುಟ್ಟೀತೇ? ಕ್ಷಣಮಾತ್ರದಲ್ಲಿ ಜನಾಂಗವನ್ನು ಹೆರಲಿಕ್ಕಾದೀತೇ?
ಹೌದು, ಚೀಯೋನೆಂಬಾಕೆಯು ಬೇನೆತಿಂದು ತನಗಾಗಿ ಮಕ್ಕಳನ್ನು ಹೆತ್ತಿದ್ದಾಳೆ.
9<<ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವವಾಗದೆ ಇರಲು ಬಿಡುವೆನೆ?>> ಎಂದು ಯೆಹೋವನು ಹೇಳುತ್ತಾನೆ.<<ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ?>> ಎಂದು ನಿನ್ನ ದೇವರು ನುಡಿಯುತ್ತಾನೆ.
10ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ,ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!
11ಆಕೆಯ ನಿಮಿತ್ತ ದುಃಖಿಸುವವರೇ, ನೀವೆಲ್ಲರೂ, ಆಕೆಯ ಸಮಾಧಾನದ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು ಎಂದುಕೊಳ್ಳುವಿರಿ.ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ.
12ಯೆಹೋವನು ಹೀಗೆನ್ನುತ್ತಾನೆ, <<ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ,ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು;
ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.
13ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು;ಯೆರೂಸಲೇಮಿನಲ್ಲೇ ನಿಮಗೆ ದುಃಖಶಮನವಾಗುವುದು.
14ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು;ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.
15ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು;ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.
16ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು;ಆಗ ಆತನಿಂದ ಹತರಾಗುವವರು ಬಹು ಜನರು.
17ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು,ಹಂದಿಯ ಮಾಂಸವನ್ನು, ಅಶುದ್ಧಪದಾರ್ಥವನ್ನೂ,
ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು>> ಎಂದು ಯೆಹೋವನು ನುಡಿಯುತ್ತಾನೆ.
18<<ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.19ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.>>20ಯೆಹೋವನು ಹೀಗೆನ್ನುತ್ತಾನೆ, <<ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.21ಇದಲ್ಲದೆ ಇವರಲ್ಲಿ ಯಾಜಕರು ಮತ್ತು ಲೇವಿಯರು ಆಗತಕ್ಕವರನ್ನು ಆರಿಸಿಕೊಳ್ಳುವೆನು>> ಎಂದು ಯೆಹೋವನು ಹೇಳುತ್ತಾನೆ. 22<<ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.
23ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ,ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು>> ಇದು ಯೆಹೋವನ ನುಡಿ.
24<<ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು;ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ;
ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.>>
ಯೆರೆಮೀಯನು
1ಪೀಠಿಕೆ
1ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.2ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.3ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.ಯೆರೆಮೀಯನ ಕರೆ
4ಕರ್ತನಾದ ಯೆಹೋವನು ನನಗೆ,
5<<ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ>> ಎಂಬ ವಾಕ್ಯವನ್ನು ದಯಪಾಲಿಸಿದನು.
6ಅದಕ್ಕೆ ನಾನು, <<ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು>> ಎಂದು ಅರಿಕೆ ಮಾಡಿದೆನು. 7ಆಗ ಯೆಹೋವನು ನನಗೆ, <<ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.
8ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು>> ಎಂದು ಹೇಳಿದನು. 9ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, <<ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;
10ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ>> ಅಂದನು.ಎರಡು ದರ್ಶನಗಳು
11ಇದಲ್ಲದೆ, <<ಯೆರೆಮೀಯನೇ, ಏನು ನೋಡುತ್ತಿರುವೆ?>> ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, <<ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ>> ಅಂದೆನು.12ಆಗ ಯೆಹೋವನು ನನಗೆ, <<ಸರಿಯಾಗಿ ನೋಡಿದ್ದಿ, ನನ್ನ ಮಾತನ್ನು ನೆರವೇರಿಸುವುದಕ್ಕೆ ನೀನು ಎಚ್ಚರಗೊಂಡಿರುವೆ ಎಂದು ತಿಳಿದುಕೋ>> ಎಂಬುದಾಗಿ ಹೇಳಿದನು.13ಎರಡನೆಯ ಬಾರಿ, <<ನೀನು ಏನು ನೋಡುತ್ತಿರುವೆ?>> ಎಂಬ ಯೆಹೋವನ ಮಾತನ್ನು ಕೇಳಿದೆನು. ಅದಕ್ಕೆ ನಾನು, <<ಉರಿಸುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಉತ್ತರ ದಿಕ್ಕಿನಿಂದ ಈ ಕಡೆಗೆ ಬಾಗಿಕೊಂಡಿದೆ>> ಅಂದೆನು.14ಆಗ ಯೆಹೋವನು ನನಗೆ, <<ಈ ದೇಶದ ನಿವಾಸಿಗಳೆಲ್ಲರ ಮೇಲೆ ಉತ್ತರ ದಿಕ್ಕಿನಿಂದ ಕೇಡು ಉಕ್ಕಿ ಬರುವುದು.15ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.16ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.17ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.18ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.19ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು>> ಎಂದು ಹೇಳಿದನು.
2ದೇವರ ಪ್ರೀತಿ
1ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2<<ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, <ಯೆಹೋವನು ಹೀಗೆನ್ನುತ್ತಾನೆ,ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.
3ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವ. ಇದು ಯೆಹೋವನು ನುಡಿ.> >>ಇಸ್ರಾಯೇಲಿನ ಪೂರ್ವಿಕರ ದ್ರೋಹ
4ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;
5ಯೆಹೋವನು ಹೀಗೆನ್ನುತ್ತಾನೆ, <<ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?
6<ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ,ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?> ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.
7ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು.ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.
8ಯಾಜಕರು, <ಯೆಹೋವನು ಎಲ್ಲಿ?> ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು. 9ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು>> ಎಂದು ಯೆಹೋವನು ನುಡಿಯುತ್ತಾನೆ.
10<<ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.
11ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ. 12ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು>> ಎಂದು ಯೆಹೋವನು ನುಡಿಯುತ್ತಾನೆ.
13<<ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ.ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.
ಇಸ್ರಾಯೇಲರ ಪಾಪಗಳ ಫಲ
14ಇಸ್ರಾಯೇಲ್ ಒಬ್ಬ ದಾಸನೋ? ಮನೆಯ ಗುಲಾಮನಾಗಿ ಹುಟ್ಟಿದವನೋ?
15ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.
16ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.
17ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ. 18ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?
19ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು;ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು>> ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.
20ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು <<ನಾನು ಸೇವೆ ಮಾಡುವುದಿಲ್ಲ>> ಎಂದು ಅಂದುಕೊಳ್ಳುತ್ತಿದ್ದಿ,ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.
21<<ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?
22ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ>> ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ. 23<<ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ>> ಎಂದು ಹೇಗೆ ಹೇಳುತ್ತಿ?ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.
24ನೀನು ಮದದಿಂದ ಗಾಳಿಯನ್ನು ಬುಸುಬುಸನೆ ಮೂಸಿ ನೋಡುವ ಅಡವಿಯ ಹೆಣ್ಣು ಕಾಡುಕತ್ತೆಯ ಹಾಗಿದ್ದಿ; ಅದಕ್ಕೆ ಬೆದೆ ಏರಿದಾಗ ಯಾವ ಗಂಡು ಕತ್ತೆಯೂ ಅದನ್ನು ಬದಿಗೆ ನೂಕುವುದಿಲ್ಲ.ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು.
25<<ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ>> ಎಂದೆನು,ಆದರೆ ನೀನು, <<ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು>> ಅಂದುಕೊಂಡಿದ್ದಿ.
26ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, <<ನೀನು ನನ್ನ ತಂದೆ>> ಎಂತಲೂ; ಕಲ್ಲಿಗೆ, <<ನೀನು ಹೆತ್ತ ತಾಯಿ>> ಎಂತಲೂ ಹೇಳುವ ಪ್ರಜೆಗಳು.ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.
27ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, <<ಎದ್ದು ನಮ್ಮನ್ನು ಉದ್ಧರಿಸು>> ಎಂದು ಮೊರೆಯಿಡುವರು.
28ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ!ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.
29ಯೆಹೋವನು ಹೀಗೆನ್ನುತ್ತಾನೆ, <<ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀರಿ? ನೀವೆಲ್ಲರೂ ನನಗೆ ದ್ರೋಹಿಗಳು.
30ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ.ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.>>
31ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, <<ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು?<ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು> >> ಎಂದು ನನ್ನ ಜನರು ಹೇಳುವುದು ಏಕೆ?
32ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.
33ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದುವರೆದಿದ್ದಿ! ಇದರಿಂದ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಹೊಂದಿಸಿಕೊಂಡಿದ್ದಿ.
34ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ;ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.
35ನೀನಾದರೋ, <<ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ>> ಎಂದುಕೊಂಡಿದ್ದಿ;<<ನಾನು ಪಾಪಮಾಡಲಿಲ್ಲ>> ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.
36ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.
37ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.
3ಇಸ್ರಾಯೇಲಿನ ವಿಶ್ವಾಸಘಾತ
1ಯೆಹೋವನು ಹೀಗೆನ್ನುತ್ತಾನೆ, <<ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ?ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?
2ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ?ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ;
ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.
3ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.
4ಈಗ ನನ್ನನ್ನು, <ನನ್ನ ತಂದೆ, ನನ್ನ ಯೌವನದ ಆಪ್ತನು> ಎಂದು ಕರೆಯುತ್ತೀಯಲ್ಲಾ.
5<ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?> ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ.>> ಎಂಬುದೇ.ಭ್ರಷ್ಟಳಾದ ಇಸ್ರಾಯೇಲಿನ ಪಾಪಕ್ಕಿಂತ ದ್ರೋಹಿಯಾದ ಯೆಹೂದದ ಪಾಪವು ಹೆಚ್ಚು
6ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, <<ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.7ಅವಳು ಇವುಗಳನ್ನೆಲ್ಲಾ ನಡೆಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು.8ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು.9ಕಲ್ಲು ಮರಗಳನ್ನು ಪೂಜಿಸಿ ವ್ಯಭಿಚಾರ ಮಾಡುವುದು ಲಘುವೆಂದು ಭಾವಿಸಿಕೊಂಡ ಆಕೆ ತನ್ನ ವ್ಯಭಿಚಾರದಿಂದ ದೇಶವನ್ನು ಅಪವಿತ್ರಪಡಿಸಿದಳು.10ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ>> ಎಂಬುದೇ ಯೆಹೋವನಾದ ನನ್ನ ನುಡಿ.11ಮತ್ತು ಯೆಹೋವನು ನನಗೆ ಹೀಗೆ ಹೇಳಿದನು, <<ಭ್ರಷ್ಟಳಾದ ಇಸ್ರಾಯೇಲ್ ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.12ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, <ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.13ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ> ಇದೇ ಯೆಹೋವನ ನುಡಿ.14ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.
15ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು. 16ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, <ಯೆಹೋವನ ನಿಬಂಧನ ಮಂಜೂಷ> ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು>> ಇದು ಯೆಹೋವನ ನುಡಿ. 17ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.18ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.ಪಶ್ಚಾತ್ತಾಪ ಪಡುವ ತನ್ನ ಜನರನ್ನು ಯೆಹೋವನು ಸ್ವೀಕರಿಸುವನು
19<<ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು <ತಂದೆ> ಎನ್ನುವಿ ಅಂದುಕೊಂಡೆನು.
20ಆದರೆ ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿದ್ದೀರಿ>> ಎಂದು ಯೆಹೋವನು ನುಡಿಯುತ್ತಾನೆ. 21ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.22<<ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು>> ಎಂದು ಯೆಹೋವನು ನುಡಿಯುತ್ತಾನೆ.ಅದಕ್ಕೆ ಜನರು, <<ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.
23ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.
24ನಮ್ಮ ಪೂರ್ವಿಕರು ದುಡಿದದ್ದನ್ನೂ, ಅವರ ದನ ಮತ್ತು ಕುರಿಗಳನ್ನೂಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.
25ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ.ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ>> ಎಂದು ಮೊರೆಯಿಡುತ್ತಾರೆ.
41ಯೆಹೋವನು, <<ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ;ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ.
2<ಯೆಹೋವನ ಜೀವದಾಣೆ> ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ,ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು>> ಎಂದು ಹೇಳುತ್ತಾನೆ.
ಯೆಹೂದಕ್ಕೆ ಉತ್ತರ ದಿಕ್ಕಿನಿಂದ ಬರುವ ಕ್ರೂರ ದಂಡನೆ
3ಯೆಹೋವನು ಯೆಹೂದದವರಿಗೂ ಮತ್ತು ಯೆರೂಸಲೇಮಿನವರಿಗೂ, <<ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.4ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು>> ಎಂದು ಹೇಳುತ್ತಾನೆ.5ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, <<ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.6ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಉತ್ತರ ದಿಕ್ಕಿನಿಂದ ವಿಪತ್ತನ್ನು ಮತ್ತು ಘೋರನಾಶವನ್ನು ಬರಮಾಡುವೆನು.7ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.8ಇದರ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.9ಆ ಕಾಲದಲ್ಲಿ ಅರಸನ ಎದೆಯು ಕುಂದುವುದು, ಅಧಿಪತಿಗಳ ಹೃದಯವು ಕುಗ್ಗುವುದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು>> ಎಂದು ಯೆಹೋವನು ನುಡಿಯುತ್ತಾನೆ.10ಆಗ ನಾನು, <<ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, <ನಿಮಗೆ ಸಮಾಧಾನವಾಗುವುದು> ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ>> ಅಂದೆನು.11ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, <<ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.12ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು>> ಎಂಬುದೇ.13ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.14ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?15ಆಹಾ, ದಾನ್ ನಗರದಿಂದ ಪ್ರಕಟಣೆಯ ಧ್ವನಿಯು ಕೇಳಿಬರುತ್ತದೆ, ಎಫ್ರಾಯೀಮಿನ ಬೆಟ್ಟದಲ್ಲಿಯೂ ಕೇಡನ್ನು ಸಾರುತ್ತದೆ.16ಇಗೋ, ಜನಾಂಗಗಳಿಗೆ ಅರುಹಿರಿ, <<ಮುತ್ತುವವರು ದೂರದೇಶದಿಂದ ಯೆರೂಸಲೇಮಿಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿ ಎತ್ತುತ್ತಾರೆ>> ಎಂದು ಪ್ರಚುರಪಡಿಸಿರಿ.17ಆ ನಗರವು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ನುಡಿಯುತ್ತಾನೆ.18ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.19ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.20ನಾಶದ ಮೇಲೆ ನಾಶವು, ಒಂದರ ಮೇಲೊಂದು ನಾಶದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು.21ನಾನು ಎಷ್ಟರವರೆಗೆ ಯುದ್ಧದ ಪತಾಕೆಗಳನ್ನು ನೋಡಲಿ, ಎಂದಿನ ತನಕ ತುತ್ತೂರಿಯ ಶಬ್ದವನ್ನು ಕೇಳಲಿ!22ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.ಬರಲಿರುವ ವಿನಾಶದ ದೃಶ್ಯ
23ನಾನು ದಿವ್ಯಜ್ಞಾನದಿಂದ ನೋಡಿದೆನು, ಆಹಾ! ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.24ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.25ನಾನು ನೋಡಲಾಗಿ ಅಯ್ಯೋ, ಜನವೇ ಇರಲಿಲ್ಲ, ಆಕಾಶದ ಸಕಲ ಪಕ್ಷಿಗಳು ಹಾರಿಹೋಗಿದ್ದವು.26ನಾನು ನೋಡಲಾಗಿ ಫಲವತ್ತಾದ ಭೂಮಿಯು ಕಾಡಾಗಿತ್ತು, ಅಯ್ಯೋ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದುಹೋಗಿದ್ದವು.27ಯೆಹೋವನು, <<ದೇಶವೆಲ್ಲಾ ಬಟ್ಟಬರಿದಾಗುವುದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.28ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು>> ಎಂದು ನುಡಿಯುತ್ತಾನೆ.29ಪಟ್ಟಣದವರೆಲ್ಲರೂ ಸವಾರರ ಮತ್ತು ಬಿಲ್ಲುಗಾರರ ಆರ್ಭಟಕ್ಕೆ ಹೆದರಿ ಓಡುತ್ತಾರೆ; ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ, ಅತ್ತ ಬಂಡೆಗಳನ್ನು ಹತ್ತುತ್ತಾರೆ; ಪ್ರತಿಯೊಂದು ಪಟ್ಟಣವು ಯಾವ ನಿವಾಸಿಯೂ ಇಲ್ಲದೆ ನಿರ್ಜನವಾಗುತ್ತದೆ.30ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.31ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, <<ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ>> ಎಂದು ಅರಚಿಕೊಳ್ಳುತ್ತಾಳೆ. 5ಯೆಹೂದದವರ ಪಾಪಗಳು
1ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ;ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ?
ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.
2ಜನರು, <<ಯೆಹೋವನ ಜೀವದಾಣೆ>> ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.
3ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ.ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.
4ಹೀಗಿರುವಲ್ಲಿ ನಾನು, <<ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;
5ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು>> ಅಂದುಕೊಂಡೆನು.ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.
6ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು,ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.
7ಯೆಹೋವನು, <<ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ.ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.
8ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಮೋಹಿಸುತ್ತಿದ್ದನು.
9ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ>> ಎಂದು ಯೆಹೋವನು ನುಡಿಯುತ್ತಾನೆ. 10<<ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ.ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.
11ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ.
12ಅವರು ಯೆಹೋವನನ್ನು ಅಲ್ಲಗಳೆದು, <ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;
13ಪ್ರವಾದಿಗಳು ಬರೀ ಗಾಳಿಯೇ, ದೈವೋಕ್ತಿಯು ಅವರಲ್ಲಿಲ್ಲ; ಅವರಿಗೆ ಹೀಗೆಯೇ ಆಗಲಿ> >> ಅಂದುಕೊಂಡಿದ್ದಾರೆ. 14ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು,<<ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು.
15ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು.ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.
16ಅದರ ಬತ್ತಳಿಕೆಯು ಬಾಯ್ದೆರೆದ ಗೋರಿಯೇ, ಅದರ ಭಟರೆಲ್ಲರೂ ಶೂರರೇ.
17ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ,ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು.
ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.
18ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು, ಇದು ಯೆಹೋವನೆಂಬ ನನ್ನ ನುಡಿ>> ಎಂದು ಹೇಳುತ್ತಾನೆ. 19<<ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?>> ಎಂದು ನಿನ್ನ ಜನರು ಅನ್ನುವಾಗ ನೀನು ಅವರಿಗೆ, <<ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ>> ಎಂದು ಹೇಳು.ದೇವಜನರಿಗೆ ಎಚ್ಚರಿಕೆ
20ಯಾಕೋಬನ ಮನೆತನದೊಳಗೆ ಇದನ್ನು ಸಾರಿರಿ, ಯೆಹೂದದಲ್ಲಿ ಹೀಗೆ ಪ್ರಕಟಿಸಿರಿ,
21ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,
22ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ.ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.
23ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.
24<<ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ,ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ>> ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.
25ನಿಮ್ಮ ಅಪರಾಧಗಳು ನಿಮಗಾಗುವ ಪ್ರಯೋಜನಗಳನ್ನು ತಪ್ಪಿಸಿಬಿಟ್ಟಿವೆ, ನಿಮ್ಮ ಪಾಪಗಳು ನಿಮ್ಮ ಒಳಿತನ್ನು ತಡೆದಿದೆ. 26ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚು ಹಾಕುವ ಹಾಗೆ ಹೊಂಚುಹಾಕುತ್ತಾರೆ;ಉರುಳುಗಳನ್ನು ಹಾಕಿ ಮನುಷ್ಯರನ್ನು ಹಿಡಿಯುತ್ತಾರೆ.
27ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ;ಇದರಿಂದ ಧನವಂತರಾಗಿದ್ದಾರೆ.
28ಕೊಬ್ಬಿ ಡಾಂಭಿಕರಾದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ.ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.
29ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ. 30ಭೀಕರವೂ, ಅಸಹ್ಯವೂ ಆದ ಸಂಗತಿಯು ದೇಶದಲ್ಲಿ ನಡೆದುಬಂದಿದೆ;
31ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ.ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?
6ಯೆರೂಸಲೇಮಿನ ಜನರಿಗೆ ಎಚ್ಚರಿಕೆ
1<<ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.
2ಚೀಯೋನ್ ನಗರಿಯು ಸೊಂಪಾದ ಹಸುರುಗಾವಲಿಗೆ ಸಮಾನವಾಗಿ ನನಗೆ ಕಾಣುತ್ತದೆ.
3ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು. 4ಇವರು, ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ, ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು ಅನ್ನುವರು.
5ಎದ್ದು ರಾತ್ರಿಯಲ್ಲಿ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳುಮಾಡೋಣ ಅಂದುಕೊಳ್ಳುವರು. 6ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ.ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ.
7ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ.ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.
8ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ. 9ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ.ದಂಗೆಕೋರ ಯೆಹೂದ
10ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ.ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.
11ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು.ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು.
ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.
12ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ. 13ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.
14ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
15ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ.ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು>> ಎಂದು ಯೆಹೋವನು ನುಡಿಯುತ್ತಾನೆ.
ಯೆಹೋವನ ಮಾರ್ಗವನ್ನು ತಿರಸ್ಕರಿಸಿದ ಯೆಹೂದ
16ಯೆಹೋವನು, <<ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು.ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು <ಅದರಲ್ಲಿ ನಾವು ನಡೆಯುವುದೇ ಇಲ್ಲ> ಎಂದರು.
17<ತುತ್ತೂರಿಯ ಶಬ್ದವನ್ನು ಕೇಳಿರಿ> ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, <ನಾವು ಕೇಳುವುದಿಲ್ಲ> ಎಂದು ಹೇಳಿದರು.
18ಆದಕಾರಣ, ಜನಾಂಗಗಳೇ, ಕೇಳಿರಿ! ಜನಸಮೂಹವೇ, ಅವರಲ್ಲಿ ನಡೆದದ್ದನ್ನು ಮನಸ್ಸಿಗೆ ತಂದುಕೋ!
19ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು. 20ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ?ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.
21ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು.ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು>> ಎಂದು ನುಡಿಯುತ್ತಾನೆ.
ಉತ್ತರ ದಿಕ್ಕಿನಿಂದ ಆಕ್ರಮಣ
22<<ಆಹಾ, ಉತ್ತರ ದಿಕ್ಕಿನಿಂದ ಜನಸಮೂಹ ಬರುತ್ತದೆ, ಮಹಾ ಜನಾಂಗವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ. 23ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ.ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ>> ಎಂದು ಯೆಹೋವನು ನುಡಿಯುತ್ತಾನೆ.
24ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ. 25ಊರ ಹೊರಗೆ ಹೋಗಬೇಡಿರಿ, ದಾರಿಯಲ್ಲಿ ನಡೆಯಬೇಡಿರಿ; ಶತ್ರುವಿನ ಕತ್ತಿಯಿದೆ, ಸುತ್ತುಮುತ್ತಲು ದಿಗಿಲು.
26ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು.ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.
27ಯೆಹೋವನು ನನಗೆ, <<ನಾನು ನಿನ್ನನ್ನು ನನ್ನ ಜನವೆಂಬ ಅದಿರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.
28ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು.ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.
29ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ.ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ.
30ಯೆಹೋವನಾದ ನಾನು ಇವರನ್ನು ನೂಕಿಬಿಟ್ಟಿದ್ದರಿಂದ ಇವರು <ಕಂದು ಬೆಳ್ಳಿ> ಎನಿಸಿಕೊಳ್ಳುವರು>> ಎಂದು ಹೇಳಿದ್ದಾನೆ.
7ದೇವಾಲಯದಲ್ಲಿ ಯೆರೆಮೀಯನಿಗೆ ಬೋಧನೆ
1ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,2<<ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.3ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, ನೀವು ನಿಮ್ಮ ನಡತೆಯನ್ನೂ, ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.4<ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ> ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.5ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿ ಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ.6ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,7ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.8ಆಹಾ, ನೀವು ನಿಷ್ಪ್ರಯೋಜಕವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.9ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,10ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, <ನಮಗೆ ಪರಿಹಾರವಾಯಿತು> ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ?11ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ>> ಎಂಬುದು ಯೆಹೋವನಾದ ನನ್ನ ನುಡಿ.12<<ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲರ ಅಧರ್ಮದ ನಿಮಿತ್ತ ಅದಕ್ಕೆ ತಂದ ಗತಿಯನ್ನು ನೋಡಿರಿ.13ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಉತ್ತರ ಕೊಡದೆ ಈ ಕೃತ್ಯಗಳನ್ನೆಲ್ಲಾ ನಡೆಸಿದಿರಿ.14ಆದಕಾರಣ ನನ್ನ ನಾಮಕ್ಕೆ ನೆಲೆಯಾದ ನಿಮ್ಮ ಭರವಸೆಗೆ ಆಧಾರವಾದ ಆಲಯಕ್ಕೂ, ನಾನು ನಿಮಗೂ ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು.15ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ತೊಲಗಿಸಿಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ತೊಲಗಿಸುವೆನು.ಯೆಹೋವನ ಎಚ್ಚರಿಕೆ
16<<ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂ ಬೇಡ, ನಾನು ಕೇಳೆನು.17ಇವರು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡುವುದನ್ನು ನೀನು ನೋಡಲಿಲ್ಲವೋ?18ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.19ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ>> ಎಂದು ಯೆಹೋವನು ನುಡಿಯುತ್ತಾನೆ.20ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, <<ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.>>21ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, <<ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು ಸಾಧಾರಣ ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.22ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನು ಕೊಡಲಿಲ್ಲ.23ಆದರೆ, <ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ> ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.24ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.25<<ನಿಮ್ಮ ಪೂರ್ವಿಕರು ಐಗುಪ್ತ ದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ಈ ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ತಡ ಮಾಡದೆ ಕಳುಹಿಸಿದ್ದೇನೆ.26ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.27<<ನೀನು ಈ ಮಾತುಗಳನ್ನೆಲ್ಲಾ ಹೇಳುವಾಗ ಅವರು ಕಿವಿಗೊಡುವುದಿಲ್ಲ, ಕರೆಯುವಾಗ ಉತ್ತರಕೊಡುವುದಿಲ್ಲ.28ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ>> ಎಂದು ಹೇಳು.ಸಂಹಾರದ ತಗ್ಗು
29ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.30ಯೆಹೋವನು ಹೀಗೆನ್ನುತ್ತಾನೆ, <<ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡೆಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.31ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಆಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ <ತೋಫೆತ್> ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.32ಆಹಾ, ಈ ಕಾರಣದಿಂದ ಆ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ <ಸಂಹಾರದ ತಗ್ಗು> ಎಂಬ ಹೆಸರಾಗುವ ದಿನಗಳು ಬರುವವು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.33ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಹಾಗು ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.34ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು>> ಇದು ಯೆಹೋವನ ನುಡಿ.
81ಯೆಹೋವನು ಹೀಗೆನ್ನುತ್ತಾನೆ, <<ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.2ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.3ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು>> ಇದು ಯೆಹೋವನ ನುಡಿ.ಯೆಹೂದ್ಯರ ದುಷ್ಟತನಕ್ಕೆ ಅದ ಭಂಗ
4ನೀನು ಅವರಿಗೆ ಹೀಗೆ ಹೇಳಬೇಕು, <<ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ?
5ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ. 6ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು <ಆಹಾ, ನಾನು ಎಂಥಾ ಕೆಲಸ ಮಾಡಿದೆ> ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.
7ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು. 8ಹೀಗಿರಲು <ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ> ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.
9ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.
10ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು.ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.
11ಸಮಾಧಾನವಿಲ್ಲದ್ದಿದ್ದರೂ, <ಸಮಾಧಾನ> ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
12ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ.ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.
13ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು>> ಇದು ಯೆಹೋವನ ನುಡಿ. 14ಆ ಕಾಲದಲ್ಲಿ ಜನರು, <<ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ.ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.
15ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ! 16ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ.ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು>> ಎಂದು ಹೇಳುವರು.
17ಅದಕ್ಕೆ ಯೆಹೋವನು, <<ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು>> ಎಂದು ನುಡಿದಿದ್ದಾನೆ.ಕುಗ್ಗಿದ ಹೃದಯದಿಂದ ಮೊರೆಯಿಡುವ ಯೆರೆಮೀಯನು
18ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.
19ಆಹಾ, ನನ್ನ ಪ್ರಜೆಯೆಂಬಾಕೆಯು, <<ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?>> ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ.ಅದಕ್ಕೆ ಯೆಹೋವನು, <<ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ>> ಎಂದು ನುಡಿಯುತ್ತಾನೆ.
20ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ.
21ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.
22ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ? 91ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು!ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!
2ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು!ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.
ಯೆರೆಮೀಯನಿಗೆ ಯೆಹೋವನ ಉತ್ತರ
3ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ.ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.
4ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ.ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.
5ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ.ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.
6ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ. 7ಹೀಗಿರಲು ಸೇನಾಧೀಶ್ವರನಾದ ಯೆಹೋವನು, <<ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.
8ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ;ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.
9ನಾನು ಅವರನ್ನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?>> ಎಂದು ನುಡಿಯುತ್ತಾನೆ. 10<<ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.
11ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತುಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು>> ಎಂದು ಯೆಹೋವನು ಹೇಳಿದ್ದಾನಲ್ಲಾ.
ದೇಶವು ಸುಟ್ಟು ಹೋಗುವುದಕ್ಕೆ ಕಾರಣ
12ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ?ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?
13ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, <<ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು.
14ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು. 15ಆದುದರಿಂದ ಆಹಾ, ನಾನು ಈ ಜನರಿಗೆ ವಿಷದ ಆಹಾರವನ್ನು ಮತ್ತು ಕಹಿಯಾದ ಪಾನಗಳನ್ನು ಕೊಡುವೆನು.
16ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು>> ಎಂದು ಹೇಳುತ್ತಾನೆ.ಯೆರೂಸಲೇಮಿನ ಶೋಕಗೀತೆ
17ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, <<ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.
18ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆಹೊರಡುವಂತೆಯೂ, ನಮ್ಮ ಕಣ್ಣುಗಳಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳಾಡಲಿ. 19<ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ> >> ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.
20ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ.ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;
21ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ.
22<<ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು>> ಎಂದು ನನಗೆ ಅಪ್ಪಣೆಯಾಯಿತು.ಯೆಹೋವನಲ್ಲಿ ಹೆಚ್ಚಳಪಡುವುದು
23ಯೆಹೋವನು ಹೀಗೆನ್ನುತ್ತಾನೆ, <<ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.
24ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ>> ಎಂದು ಯೆಹೋವನು ನುಡಿಯುತ್ತಾನೆ. 25<<ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ.26ಏಕೆಂದರೆ ಸಕಲ ಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು>> ಎಂದು ಯೆಹೋವನು ನುಡಿಯುತ್ತಾನೆ. 10ನಿರ್ಜೀವ ದೇವರುಗಳಿಗೆ ಭಯಪಡಬಾರದು
1ಇಸ್ರಾಯೇಲ್ ವಂಶದವರೇ, ಯೆಹೋವನು ನಿಮಗೆ ನುಡಿಯುವ ಮಾತನ್ನು ಕೇಳಿರಿ;
2ಯೆಹೋವನು, <<ಜನಾಂಗಗಳ ಆಚರಣೆಯನ್ನು ಅಭ್ಯಾಸ ಮಾಡಿಕೊಳ್ಳಬೇಡಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ. 3ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.
4ಅದನ್ನು ಬೆಳ್ಳಿ, ಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಂತೆ ಮೊಳೆಗಳಿಂದ, ಸುತ್ತಿಗೆಯಿಂದ ಭದ್ರಪಡಿಸುತ್ತಾರೆ.
5ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು;ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ>> ಎಂದು ಹೇಳುತ್ತಾನೆ
6ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ.
7ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ. 8ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.
9ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ.ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ.
10ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ.ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.
11ನೀವು ಅವುಗಳಿಗೆ, <<ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು>> ಎಂದು ಹೇಳಿರಿ.
12ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.
13ಆತನ ಗರ್ಜನೆಗೆ ಆಕಾಶದಲ್ಲಿ ನೀರು ಭೋರ್ಗರೆಯುವಂತೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ.ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.
14ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು.ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
15ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.
16ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು.ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.
ಬರಲಿರುವ ವಿನಾಶ
17ಮುತ್ತಿಗೆಗೆ ಈಡಾದ ಜನವೇ, ಗಂಟುಕಟ್ಟಿಕೊಂಡು ದೇಶದೊಳಗಿಂದ ನಡೆ.
18<<ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು,ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು>> ಎಂದು ಯೆಹೋವನು ನುಡಿಯುತ್ತಾನೆ.
19ಅಯ್ಯೋ, ನನ್ನ ಗಾಯ! ನನಗೆ ಬಿದ್ದ ಪೆಟ್ಟು ಭೀಕರ! ಆದರೂ ನಾನು, <<ಇದು ನನಗೆ ವ್ಯಾಧಿಯೇ ಸರಿ, ಸಹಿಸಬೇಕು>> ಅಂದುಕೊಂಡಿದ್ದೇನೆ.
20ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ.ನನ್ನ ಗುಡಾರವನ್ನು ಹಾಕುವುದಕ್ಕೂ, ನನ್ನ ಪರದೆಗಳನ್ನು ಬಿಗಿಯುವುದಕ್ಕೂ ಇನ್ನು ಯಾರೂ ಇರುವುದಿಲ್ಲ.
21ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ.ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.
22ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.ಯೆರೆಮೀಯನ ವಿಜ್ಞಾಪನೆ
23ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು.ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನು ಇಡಲಾರನು.
24ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ.ರೋಷದಿಂದ ದಂಡಿಸದಿರು. ನಾನು ಕೇವಲ ಕ್ಷೀಣನಾದೇನು.
25ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು.ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.
11ಒಡಂಬಡಿಕೆಯ ಉಲ್ಲಂಘನೆ
1ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,2<<ಈ ನಿಬಂಧನವಚನಗಳನ್ನು ಕೇಳಿ ಯೆಹೂದ್ಯರಿಗೂ ಹಾಗೂ ಯೆರೂಸಲೇಮಿನ ನಿವಾಸಿಗಳಿಗೂ,3ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, <ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.4ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.5ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು> ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ>> ಎಂದು ಸಾರಬೇಕು ಎಂದನು. ಆಗ ನಾನು, <<ಅಪ್ಪಣೆಯಂತಾಗಲಿ, ಯೆಹೋವನೇ>> ಎಂದು ಉತ್ತರಕೊಟ್ಟೆನು.6ಯೆಹೋವನು ನನಗೆ, <<ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, <ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.7ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.8ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು> >> ಎಂದು ಹೇಳಿದನು.ಯೆಹೂದದ ದ್ರೋಹದ ನಿಮಿತ್ತ ಸಂಭವಿಸುವ ಕೇಡು
9ಯೆಹೋವನು ನನಗೆ, <<ಯೆಹೂದ್ಯರಲ್ಲಿಯೂ ಮತ್ತು ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.10ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.11ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, <ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.12ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.>13ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.14ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ>> ಎಂದು ಹೇಳಿದನು.
15ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?
16ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ. 17ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, <<ನಿನಗೆ ಕೆಡುಕಾಗಲಿ>> ಎಂದು ಶಪಿಸಿದ್ದಾನೆ.ಯೆರೆಮೀಯನಿಗೆ ವಿರುದ್ಧವಾದ ಒಳಸಂಚು
18ಯೆಹೋವನು ತಿಳಿಸಿದ್ದರಿಂದ ಅವರ ಕುತಂತ್ರವು ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ.19ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. <<ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ>> ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.20ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ,ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.
21ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, <<ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ.22ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.23ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು>> ಎಂದು ಹೇಳಿದ್ದಾನೆ. 12ನ್ಯಾಯಕ್ಕಾಗಿ ಚರ್ಚಿಸಿದ ಯೆರೆಮೀಯ
1ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು.ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?
2ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದೇಕೆ? ನೀನು ಅವರನ್ನು ನೆಟ್ಟಿದ್ದಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ.ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.
3ಯೆಹೋವನೇ, ನೀನು ನನ್ನನ್ನು ತಿಳಿದಿದ್ದಿ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತಿ.ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು.
4ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ.<<ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ>> ಎಂದು ಹೇಳಿದ್ದಾರಷ್ಟೆ.
ದೇವರ ಉತ್ತರ
5ಇಂತೆನ್ನುವ ಯೆಹೋವನು ನನಗೆ, <<ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ?ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?
6ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ.ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ>> ಎಂದು ಹೇಳಿದ್ದಾನೆ.
7ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವತ್ತನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.
8ನನ್ನ ಸ್ವಾಸ್ತ್ಯವಾದ ಜನವು ನನ್ನ ಪಾಲಿಗೆ ಅರಣ್ಯದಲ್ಲಿರುವ ಸಿಂಹದಂತಿದೆ; ಅದು ನನ್ನ ಮೇಲೆ ಗರ್ಜಿಸಿದೆ; ಆದಕಾರಣ ಅದನ್ನು ಹಗೆಮಾಡಿದ್ದೇನೆ.
9ನನ್ನ ಸ್ವಾಸ್ತ್ಯವಾದ ಜನವು ನನ್ನ ದೃಷ್ಟಿಗೆ ಬೇಟೆಯ ಹಕ್ಕಿಯಂತಿದೆ, ಹದ್ದುಗಳು ಅದರ ಸುತ್ತಲೂ ವಿರುದ್ಧವಾಗಿ ಕುಳಿತಿವೆಯೋ?ಹೋಗಿರಿ, ಅದನ್ನು ತಿಂದುಬಿಡುವುದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರೆತನ್ನಿರಿ.
10ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.
11ಹೌದು, ಹಾಳುಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾರೂ ಗಮನಿಸದೆ ಇರುವುದರಿಂದ ದೇಶವೆಲ್ಲಾ ಹಾಳುಬಿದ್ದಿದೆ. 12ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ;ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.
13ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ.ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.
ಯೆಹೂದದ ಕೆಟ್ಟ ನೆರೆಯವರ ಗತಿ
14ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, <<ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.15ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು.16ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನೆತ್ತಿ <ಯೆಹೋವನ ಜೀವದಾಣೆ> ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು.17ಆದರೆ ಯಾವ ಜನಾಂಗವು ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು, ಹೌದು, ಕಿತ್ತುಹಾಕಿ ನಾಶ ಮಾಡುವೆನು ಎಂಬುದು ಯೆಹೋವನ ನುಡಿ>> ಎಂದು ಹೇಳುತ್ತಾನೆ.
13ನಡುಕಟ್ಟಿನ ಸಾಮ್ಯ
1ಯೆಹೋವನು ನನಗೆ, <<ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಿಡಬೇಡ>> ಎಂದು ಅಪ್ಪಣೆಕೊಟ್ಟನು.2ಆಗ ನಾನು ಯೆಹೋವನ ಮಾತಿನಂತೆ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊಂಡೆನು.3ಆ ಮೇಲೆ ಯೆಹೋವನ ಮಾತು ಎರಡನೆಯ ಬಾರಿ ನನಗೆ ಕೇಳಿ ಬಂತು.4ಅವನು ನನಗೆ, <<ನೀನು ಕೊಂಡುಕೊಂಡು ಸೊಂಟಕ್ಕೆ ಬಿಗಿದ ನಡುಕಟ್ಟನ್ನು ತೆಗೆದುಕೊಂಡು ಹೊರಟು ಯೂಫ್ರೆಟಿಸ್ ನದಿಗೆ ಹೋಗಿ, ಅದನ್ನು ಅಲ್ಲಿ ಬಂಡೆಯ ಸಂದಿನೊಳಗೆ ಬಚ್ಚಿಡು>> ಎಂಬುದಾಗಿ ನುಡಿದನು.5ಆಗ ಯೆಹೋವನ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೆಟಿಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆನು.6ಬಹು ದಿನಗಳ ಮೇಲೆ ಯೆಹೋವನು ನನಗೆ, <<ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ>> ಎಂದು ಹೇಳಿದನು.7ನಾನು ಯೂಫ್ರೆಟಿಸ್ ನದಿಗೆ ಹೋಗಿ ಅಗೆದು, ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು, ಆಹಾ, ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.8ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,9<<ಇದು ಯೆಹೋವನಾದ ನನ್ನ ನುಡಿ, ಈ ನಡುಕಟ್ಟಿನಂತೆ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಮತ್ತು ಯೆರೂಸಲೇಮಿನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.10ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.11ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ>> ಎಂಬುದೇ.ಗಡಿಗೆಗಳ ಸಾಮ್ಯ
12<<ಹೀಗಿರಲು ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು>> ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ಹೇಳುವ ಮಾತನ್ನು ಕೇಳಿರಿ ಎಂದು ನೀನು ಅವರಿಗೆ ಸಾರು; ಆಗ ಅವರು ನಿನಗೆ, <<ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು ನಮಗೆ ಗೊತ್ತಿಲ್ಲವೋ>> ಎಂದು ಹೇಳುವರು.13ಆಗ ನೀನು ಅವರಿಗೆ, <<ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ,14ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು>> ಇದು ಯೆಹೋವನ ನುಡಿ.ಯೆಹೂದವನ್ನು ಎಚ್ಚರಿಸಿದ್ದು
15ಕಿವಿಗೊಟ್ಟು ಕೇಳಿರಿ, ಹೆಮ್ಮೆಪಡಬೇಡಿರಿ; ಯೆಹೋವನೇ ಮಾತನಾಡಿದ್ದಾನೆ.
16ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು.ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.
17ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು.ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.
ರಾಜನನ್ನು ರಾಜಮಾತೆಯನ್ನೂ ಎಚ್ಚರಿಸಿದ್ದು
18ರಾಜನಿಗೂ ಮತ್ತು ರಾಜಮಾತೆಗೂ, <<ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ>> ಎಂದು ಹೇಳಿರಿ.
19ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.ಬಾಬೆಲಿನಿಂದ ಯೆಹೂದಕ್ಕೆ ಬರುವ ದುರ್ಗತಿ
20ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು.ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡೂ ಎಲ್ಲಿ?
21ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ?ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ.
22<<ಇವು ನನಗೆ ಏಕೆ ಸಂಭವಿಸಿದವು>> ಎಂದು ನೀನು ಮನದೊಳಗೆ ಅಂದುಕೊಂಡರೆ,ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.
23ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ?ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.
24ಆದಕಾರಣ ಬಿರುಗಾಳಿಯು ಬಡಿದುಕೊಂಡು ಹೋಗುವ ಒಣ ಹುಲ್ಲನ್ನೋ ಎಂಬಂತೆ ನಾನು ಅವರನ್ನು ಚದರಿಸಿಬಿಡುವೆನು. 25ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ನುಡಿಯುತ್ತಾನೆ.
26ನಿನ್ನ ಉಡುಗೆಯನ್ನು ನಿನ್ನ ಕಣ್ಣಮುಂದೆಯೇ ಕೀಳಿಸುವೆನು, ನಿನಗೆ ಅವಮಾನವಾಗುವುದು.
27ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ.ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?
14ಯೆಹೂದಕ್ಕೆ ಸಂಭವಿಸುವ ಕ್ಷಾಮ
1ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ:
2ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ,ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.
3ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ.ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ,
ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ.
ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
4ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
5ಇದಲ್ಲದೆ ಹೆಣ್ಣು ಜಿಂಕೆಯು ಕಾಡಿನಲ್ಲಿ ಈದು, ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ.
6ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.ಪ್ರವಾದಿಯು ಸ್ವಜನರಿಗಾಗಿ ಮಾಡಿದ ಪ್ರಾರ್ಥನೆ
7ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ,ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು.
ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.
8ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ,ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ,
ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?
9ಏಕೆ ಸ್ತಬ್ಧನಂತೆಯೂ , ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ?ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.
ಯೆಹೋವನು ತನ್ನ ಜನರನ್ನೂ ಮತ್ತು ಅವರನ್ನು ವಂಚಿಸಿದ ಪ್ರವಾದಿಗಳನ್ನೂ ಗದರಿಸಿದ್ದು
10ಯೆಹೋವನು ಈ ಜನರನ್ನು ಕುರಿತು, <<ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ.ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು;
ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು>> ಎಂದು ಹೇಳಿದ್ದಾನೆ.
11ಮತ್ತು ಯೆಹೋವನು ನನಗೆ, <<ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆ ಮಾಡಬೇಡ.
12ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು.ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು>> ಎಂದು ಹೇಳಿದನು.
13ಅದಕ್ಕೆ ನಾನು, <<ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, <ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ> >> ಎಂಬುದಾಗಿ ಹೇಳಿದೆನು.14ಆಗ ಯೆಹೋವನು ನನಗೆ ಹೀಗೆ ನುಡಿದನು, <<ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.15ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, <ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು> >> ಎಂದು ಹೇಳುತ್ತೇನೆ.16ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.17ನೀನು ಅವರಿಗೆ, <<ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.18ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು>> ಎಂದನು.ಪ್ರವಾದಿಯು ಸ್ವಜನರಿಗಾಗಿ ಮಾಡಿದ ಇನ್ನೊಂದು ಪ್ರಾರ್ಥನೆ
19ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ?ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ?
ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!
20ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ,ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ;
ನಾವು ನಿನಗೇ ಪಾಪಮಾಡಿದ್ದೇವೆ.
21ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ.ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ,
ಅದನ್ನು ಭಂಗಪಡಿಸದಿರು.
22ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ?ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ?
ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು.
ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.
15ಯೆಹೂದಕ್ಕೆ ಕಠಿಣ ದಂಡನೆ
1ಯೆಹೋವನು ನನಗೆ ಹೀಗೆ ಹೇಳಿದನು, <<ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!2ಅವರು, <ನಾವು ಎಲ್ಲಿಗೆ ಹೋಗೋಣ?> ಎಂದು ನಿನ್ನನ್ನು ಕೇಳಲು ನೀನು ಅವರಿಗೆ,<ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ.
ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ> >> ಎಂದು ಹೇಳು.
3<<ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು,ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು>> ಎಂಬುದು ಯೆಹೋವನಾದ ನನ್ನ ಮಾತು.
4<<ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ,ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
5ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಪ್ರಲಾಪಿಸುವರು?ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು?
6ಯೆಹೋವನ ಈ ಮಾತನ್ನು ಕೇಳು, <ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ.ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.
7ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು.ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.
8ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು.ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು.
ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು.
9ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ,ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಳುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ.
ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು> >> ಇದು ಯೆಹೋವನ ನುಡಿ.
ಪ್ರವಾದಿಯ ಪ್ರಲಾಪ
10ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ.ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.
11ಇದಕ್ಕೆ ಯೆಹೋವನು, <<ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು.ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.
12ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು?ತಾಮ್ರವನ್ನು ಮುರಿಯುವುದು ಯಾರಿಂದಾದೀತು?>> ಎಂದು ಹೇಳಿದನು.
13<<ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಮತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ,
14ಅವುಗಳನ್ನು ನಿನ್ನ ಶತ್ರುಗಳ ಕೈಗೆ ಕೊಟ್ಟು, ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.>> 15ಅದಕ್ಕೆ ನಾನು, <<ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು;ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು.
ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ.
ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.
16ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು.ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!
17ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ.ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕುಳಿತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.
18ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ?ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?>> ಎಂದು ಅರಿಕೆಮಾಡಿಕೊಂಡೆನು.
ಯೆಹೋವನು ಪ್ರವಾದಿಯನ್ನು ಧೈರ್ಯಗೊಳಿಸಿದ್ದು
19ಇದರಿಂದ ಯೆಹೋವನು, <<ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು.ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ.
ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.
20ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು.ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ.
ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.
21ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು,ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು>> ಎಂದಿದ್ದಾನೆ.
16ಅಪತ್ತಿನ ದಿನ
1ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,2<<ನೀನು ಮದುವೆಯಾಗಬೇಡ, ಗಂಡು ಮತ್ತು ಹೆಣ್ಣು ಮಕ್ಕಳು ಈ ಸ್ಥಳದಲ್ಲಿ ಹುಟ್ಟದಿರಲಿ.3ಏಕೆಂದರೆ ಈ ಸ್ಥಳದಲ್ಲಿ ಹುಟ್ಟುವ ಗಂಡು ಹೆಣ್ಣು ಮಕ್ಕಳು, ಅವರನ್ನು ಹೆತ್ತ ತಾಯಿಯರು, ಅವರನ್ನು ಈ ದೇಶದಲ್ಲಿ ಪಡೆದ ತಂದೆಯಂದಿರಿಗೆ, ಇವರೆಲ್ಲರ ವಿಷಯವಾಗಿ ಯೆಹೋವನು ಹೀಗೆ ನುಡಿದಿದ್ದಾನೆ,4ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು>> ಎಂಬುದೇ.5ಯೆಹೋವನು ನನಗೆ, <<ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡಿದುಕೊಳ್ಳಲೂ ಬೇಡ. ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಹಾಗು ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.6ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.7ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ.8ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕುಳಿತು ತಿನ್ನಬೇಡ, ಕುಡಿಯಬೇಡ.9ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, <ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.>10ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, <ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?> ಎಂದು ಕೇಳುವಾಗ,11ನೀನು ಅವರಿಗೆ ಹೀಗೆ ಹೇಳಬೇಕು, <ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ,12ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ,13ನೀವಾಗಲಿ ಅಥವಾ ನಿಮ್ಮ ಪೂರ್ವಿಕರಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸುವುದಿಲ್ಲ> >> ಎಂದು ಹೇಳಿದನು.ಮುಂದಿನ ಅತಿಶಯವಾದ ಉದ್ಧಾರ
14<<ಇಗೋ, ಮುಂದಿನ ಕಾಲದಲ್ಲಿ ಜನರು, <ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ> ಎಂಬುದಾಗಿ ಪ್ರಮಾಣಮಾಡುವುದನ್ನು ಬಿಟ್ಟು,15<ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ> ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ>> ಎಂದು ಯೆಹೋವನು ಘೋಷಿಸುತ್ತಾನೆ.ಯೆಹೂದ್ಯರಲ್ಲಿ ನೆಲೆಗೊಂಡ ಪಾಪ, ತಪ್ಪಿಸಿಕೊಳ್ಳಲಾಗದ ದಂಡನೆ
16ಯೆಹೋವನು ಹೀಗೆನ್ನುತ್ತಾನೆ, <<ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.17ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.18ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.>>ಬಲಪಡಿಸುವ ಯೆಹೋವನು
19ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, <<ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ>> ಎಂದು ಅರಿಕೆ ಮಾಡುವರು.20ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.21ಈ ನಿಮಿತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು <<ಯೆಹೋವ>> ಎಂದು ಅವರಿಗೆ ಗೊತ್ತಾಗುವುದು.
17ಯೆಹೂದವನ್ನು ಶಿಕ್ಷಿಸುವ ಯೆಹೋವನು
1ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ.ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.
2ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ,ಅವರ ಯಜ್ಞವೇದಿಗಳನ್ನು ಮತ್ತು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು.
3ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ,ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.
4ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ.ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು.
ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.
ದೇವರನ್ನು ನಂಬುವವರಿಗೂ ಮನುಷ್ಯರನ್ನು ನಂಬುವವರಿಗೂ ಇರುವ ವ್ಯತ್ಯಾಸ
5ಯೆಹೋವನು ಹೀಗೆನ್ನುತ್ತಾನೆ, <<ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು,ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.
6ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು.ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.
7ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.
8ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ,ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.>>
9ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ;ಅದನ್ನು ತಿಳಿದವರು ಯಾರು?
10ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು,ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.
11ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು.ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.
12ನಮ್ಮ ಪವಿತ್ರಾಲಯಸ್ಥಾನವು ಆದಿಯಿಂದಲೂ ಉನ್ನತವಾದ ಮಹಿಮೆಯ ಸಿಂಹಾಸನವಾಗಿದೆ.
13ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು.ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ;
ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.
ಪ್ರವಾದಿಯ ವಿಜ್ಞಾಪನೆ
14ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು.ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.
15ಆಹಾ, ಜನರು ನನಗೆ, <<ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ>> ಎಂದು ಹೇಳುತ್ತಾರೆ.
16ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ.ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ.
ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.
17ನನ್ನ ಹೆದರಿಕೆಗೆ ಕಾರಣನಾಗಬೇಡ; ಕೇಡಿನ ಕಾಲದಲ್ಲಿ ನನಗೆ ಆಶ್ರಯವಾಗಿದ್ದಿ.
18ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ.ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ.
ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು.
ಸಬ್ಬತ್ ದಿನವನ್ನು ಆಚರಿಸಬೇಕೆಂಬ ಬೋಧನೆ
19ಯೆಹೋವನು ನನಗೆ ಇಂತೆಂದನು, <<ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ , ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು,20<ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ.21ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.22ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.23ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.24ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,25ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ, ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು. ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇಮಿನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು. ಈ ಪಟ್ಟಣವು ನಿತ್ಯವೂ ನೆಲೆಯಾಗಿರುವುದು.26ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.27ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ> >> ಎಂದು ಹೇಳಿದನು.
18ಕುಂಬಾರ ಮತ್ತು ಜೇಡಿಮಣ್ಣು
1ಯೆಹೋವನು ಯೆರೆಮೀಯನಿಗೆ,2<<ನೀನೆದ್ದು ಕುಂಬಾರನ ಮನೆಗೆ ಇಳಿದುಹೋಗು; ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುವೆನು>> ಎಂಬ ಮಾತನ್ನು ದಯಪಾಲಿಸಿದನು.3ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು; ಇಗೋ, ಅವನು ಚಕ್ರದ ಮೇಲೆ ತನ್ನ ಕೆಲಸವನ್ನು ನಡೆಸುತ್ತಿದ್ದನು.4ಆ ಕುಂಬಾರನು ಜೇಡಿಮಣ್ಣಿನಿಂದ ಮಾಡುತ್ತಿದ್ದ ಪಾತ್ರೆಯು ಅವನ ಕೈಯಲ್ಲಿ ಕೆಟ್ಟುಹೋಗಲು ಅವನು ಪುನಃ ತನಗೆ ಸರಿತೋಚಿದ ಹಾಗೆ ಅದನ್ನು ಹೊಸ ಪಾತ್ರೆಯನ್ನಾಗಿ ಮಾಡಿದನು.5ಆಗ ಯೆಹೋವನು ನನಗೆ ಈ ಮಾತನ್ನು ಅನುಗ್ರಹಿಸಿದನು,6<<ಯೆಹೋವನು ಹೀಗೆನ್ನುತ್ತಾನೆ, ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ.7ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕಿತ್ತು, ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ,8ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.9ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ನೆಟ್ಟು ಕಟ್ಟಬೇಕೆಂದು ಅಪ್ಪಣೆಕೊಟ್ಟಾಗ,10ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.11ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, <ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ> ಎಂಬ ಮಾತನ್ನು ಹೇಳು.12ಅವರೋ, <ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು> ಎಂದು ಹೇಳುತ್ತಾರೆ.>>
13ಹೀಗಿರಲು ಯೆಹೋವನು ಹೀಗೆನ್ನುತ್ತಾನೆ, <<ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ?ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯಕಾರ್ಯವನ್ನು ಮಾಡಿದ್ದಾಳೆ.
14ಲೆಬನೋನಿನ ಹಿಮವು ಅರಣ್ಯದ ಶಿಖರದಿಂದ ತಪ್ಪುವುದೇ? ದೂರದಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದೇ? 15ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ;ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ,
ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.
16ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು;ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.
17ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲು ಮಾಡುವೆನು.ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.>>
ಜನರ ಒಳಸಂಚು ಪ್ರವಾದಿಯ ಪ್ರಾರ್ಥನೆ
18ಆಗ ಅವರು, <<ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ;ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು.
ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ>> ಎಂದುಕೊಂಡರು.
19ಯೆಹೋವನೇ, ನನ್ನ ಕಡೆಗೆ ಕಿವಿಗೊಡು, ನನ್ನೊಡನೆ ವ್ಯಾಜ್ಯವಾಡುವವರ ಮಾತನ್ನು ಕೇಳು.
20ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ.ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.
21ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು;ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ;
ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ.
ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.
22ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ.ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.
23ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ.ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ.
ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.
19ಮಣ್ಣಿನ ಮಡಕೆಯ ಸಾಮ್ಯ
1ಯೆಹೋವನು ನನಗೆ ಹೀಗೆ ಹೇಳಿದನು, <<ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ.2ನೀನು ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು.3ನೀನು ಅವರಿಗೆ, <ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.4<< <ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.5ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿ ಕೊಡುವುದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ. ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.6ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವುದು.7ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.8ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.9ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ, ಸಂಕಟಕ್ಕೆ ಗುರಿಮಾಡುವಾಗ, ಅವರು ತಮ್ಮ ಇಷ್ಟ ಮಿತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.> >>10ಆಗ ನೀನು ನಿನ್ನ ಸಂಗಡ ಬಂದವರ ಕಣ್ಣೆದುರಿಗೆ ಆ ಮಡಿಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆ ಹೇಳು,11<<ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.12ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಹೀಗೆ ನಾಶಪಡಿಸಿ, ಈ ಪಟ್ಟಣವನ್ನು ತೋಫೆತಿನ ಸ್ಥಿತಿಗೆ ತರುವೆನು.13ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.> >>14ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು,15<<ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು>> ಎಂದು ಸಮಸ್ತ ಜನರಿಗೆ ಸಾರಿದನು.
20ಪಷ್ಹೂರನು ಯೆರೆಮೀಯನನ್ನು ಕೋಳಕ್ಕೆ ಹಾಕಿಸಿದ್ದು
1ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು.2ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.3ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು, <<ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ ಎಂದು ಹೇಳದೆ ಮಾಗೋರ್ ಮಿಸ್ಸಾಬೀಬ್ ಎಂದು ಹೇಳಿದ್ದಾನೆ.4ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.5ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬೆಲೋನಿಗೆ ತೆಗೆದುಕೊಂಡು ಹೋಗುವರು.6ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬೆಲೋನಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ>> ಎಂದು ನುಡಿದಿದ್ದಾನೆ.ಪ್ರವಾದಿಯ ಪ್ರಲಾಪ
7ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ;ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.
8ನಾನು ಮಾತನಾಡುವುದೆಲ್ಲಾ ಅರಚಾಟವೇ. <<ಬಲಾತ್ಕಾರ, ಕೊಳ್ಳೆ>> ಎಂದೇ ಕೂಗಿಕೊಳ್ಳುತ್ತೇನೆ.ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.
9<<ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ>> ಎಂದುಕೊಂಡರೆ,ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ,
ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.
10<<ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು>> ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ.ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ <<ಇವನು ಎಡವಿ ಬೀಳಲಿ>> ಎಂದು ನನ್ನನ್ನು ಹೊಂಚಿನೋಡುತ್ತಾ,
<<ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು>> ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.
11ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು.ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.
12ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ,ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆಮಾಡಿದ್ದೇನಷ್ಟೆ.
13ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ. 14ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೆನ್ನಿಸಿಕೊಳ್ಳಲಿ!
15<<ನಿನಗೆ ಗಂಡುಮಗು ಹುಟ್ಟಿದೆ>> ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಕೇವಲ ಆನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ! 16ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ.ಮುಂಜಾನೆಯಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!
17ಅವನು ನನ್ನನ್ನು ಗರ್ಭದಲ್ಲೇ ಕೊಲ್ಲಲಿಲ್ಲವಲ್ಲಾ; ಹೀಗೆ ಮಾಡಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು, ಆಕೆಯ ಗರ್ಭವು ಯಾವಾಗಲೂ ಬಸುರಾಗಿಯೇ ಇರುತ್ತಿತ್ತು.
18ನಾನು ಶ್ರಮದುಃಖಗಳನ್ನು ನೋಡುವುದಕ್ಕೂ, ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು?
21ದೇವರು ಚಿದ್ಕೀಯನ ಬಿನ್ನಹವನ್ನು ತಿರಸ್ಕರಿಸಿದ್ದು
1ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ, ಯಾಜಕನು ಮಾಸೇಯನ ಮಗನು ಆದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,2<<ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು>> ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.3ಆಗ ಯೆರೆಮೀಯನು, <<ಈ ಉತ್ತರವನ್ನು ಚಿದ್ಕೀಯನಿಗೆ ತಿಳಿಸಿರಿ>> ಎಂದು ಅವರಿಗೆ ಹೇಳಿದನು.4ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.5ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು.6ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಮತ್ತು ಪಶುಗಳನ್ನೂ ಬಾಧಿಸುವೆನು, ಘೋರವ್ಯಾಧಿಯು ಅವರನ್ನು ಸಾಯಿಸುವುದು.7ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.8<<ನೀನು ಈ ಜನರಿಗೆ ಹೀಗೆ ಹೇಳು>> ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, <<ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.9ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವನು. ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮೊರೆಹೋಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.10ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.>>ಯೆಹೂದದ ರಾಜಮನೆತನಕ್ಕೆ ಶಾಪ
11ಯೆಹೂದದ ಅರಸನ ಮನೆತನದ ವಿಷಯವಾಗಿ ಯೆಹೋವನು ಹೇಳಿರುವ ಈ ಮಾತನ್ನು ಕೇಳಿರಿ.
12ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, <<ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು,ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ,
ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ>> ಎಂಬುದೇ.
13ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಣ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ.<<ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?>> ಎಂದು ಹೇಳುವವರೇ,
14ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು,ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.
22ಯೆಹೂದದ ಅರಸರ ವಿಷಯವಾದ ದೈವೋಕ್ತಿಗಳು
1ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, <<ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು,2ದಾವೀದನ ಸಿಂಹಾಸನರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಮತ್ತು ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.3ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ>> ಎಂದು ಹೇಳುತ್ತಾನೆ.4<<ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ, ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.5ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ>> ಎಂಬುದೇ.6ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ,<<ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ,
ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.
7ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನ್ನ ವಿರುದ್ಧವಾಗಿ ಸಿದ್ಧಪಡಿಸುವೆನು; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು. 8ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ, <ಯೆಹೋವನು ಈ ಮಹಾ ಪಟ್ಟಣಕ್ಕೆ ಏಕೆ ಹೀಗೆ ಮಾಡಿದನು?> ಎಂದು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ,
9<ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ, ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು> ಎಂದು ಅಂದುಕೊಳ್ಳುವರು.>>ಅರಸನಾದ ಶಲ್ಲೂಮನು
10ಸತ್ತವನಿಗಾಗಿ ಅಳಬೇಡಿರಿ, ಗೋಳಾಡಬೇಡಿರಿ;ಸೆರೆಯಾದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂಮಿಯನ್ನು ನೋಡನು.
11ಯೆಹೂದದ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, <<ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು.
12ಅವನನ್ನು ಎಲ್ಲಿಗೆ ಸೆರೆಯೊಯ್ದರೋ ಅಲ್ಲೇ ಸಾಯುವನು, ಈ ದೇಶವನ್ನು ಇನ್ನು ಕಾಣನು>> ಎಂಬುದೇ.ಅರಸನಾದ ಯೆಹೊಯಾಕೀಮನು
13ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ!ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ,
14ಆಹಾ, <<ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು>> ಎಂದು ಹೇಳಿ,ಅಗಲಗಲವಾದ ಕಿಟಕಿಗಳನ್ನಿಡಿಸಿ, ಒಳಗೆ ಗೋಡೆಗೆಲ್ಲಾ ದೇವದಾರಿನ ಹಲಗೆಗಳನ್ನು ಹೊದಿಸಿ, ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ!
15ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ?ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.
16ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ. 17ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.
18ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು.<<ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.
19ಇವನನ್ನು ಯೆರೂಸಲೇಮಿನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಡಿ ಮಣ್ಣುಪಾಲು ಮಾಡುವರು>> ಎನ್ನುತ್ತಾನೆ. 20ಚೀಯೋನ್ ಯುವತಿಯೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ!ಬಾಷಾನಿನಲ್ಲಿ ಮೊರೆಯಿಡು, ಅಬಾರೀಮಿನಲ್ಲಿ ಅರಚಿಕೋ! ನಿನ್ನೊಂದಿಗೆ ವ್ಯಭಿಚಾರ ಮಾಡಿದವರೆಲ್ಲಾ ಹಾಳಾಗಿ ಹೋದರಲ್ಲಾ.
21ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ <<ನಾನು ಕೇಳುವುದಿಲ್ಲ>> ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ. 22ನಿನ್ನನ್ನು ಅಟ್ಟಿಕೊಂಡು ಹೋಗುವ ಕುರುಬರನ್ನು ಗಾಳಿಯು ಅಟ್ಟಿಬಿಡುವುದು.ನಿನ್ನೊಂದಿಗೆ ವ್ಯಭಿಚಾರ ಮಾಡಿದವರು ಸೆರೆಹೋಗುವರು; ಆಗ ನಿನ್ನ ಸಕಲ ದುಷ್ಕೃತ್ಯಗಳ ನಿಮಿತ್ತ ನೀನು ಆಶಾಭಂಗಪಟ್ಟು ಅವಮಾನಕ್ಕೀಡಾಗುವುದು ಖಂಡಿತ.
23ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು! 24ಯೆಹೋವನು ಹೀಗೆನ್ನುತ್ತಾನೆ, <<ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!25ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು.26ನಿನ್ನನ್ನೂ ಮತ್ತು ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು; ಅಲ್ಲೇ ಸಾಯುವಿರಿ.27ಹಿಂದಿರುಗಬೇಕೆಂದು ಹಂಬಲಿಸುವ ದೇಶಕ್ಕೆ ಅವರು ಹಿಂದಿರುಗುವುದೇ ಇಲ್ಲ>> ಎಂಬುದೇ.28ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ,ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ?
ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?
29ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳು!
30ಯೆಹೋವನು, <<ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ;ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳುವುದಿಲ್ಲ ಬಾಳನು>> ಎಂದು ಹೇಳುತ್ತಾನೆ.
23ಧರ್ಮರಾಜನು ಪಟ್ಟಕ್ಕೆ ಬರುವ ವಾಗ್ದಾನ
1<<ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ>> ಎಂಬುದು ಯೆಹೋವನ ನುಡಿ.2ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, <<ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.3ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.4ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ>> ಎಂಬುದೇ.
5ಯೆಹೋವನು, <<ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು.ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.
6ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು;<ಯೆಹೋವ ಚಿದ್ಕೇನು> ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು>> ಎಂದು ನುಡಿಯುತ್ತಾನೆ.
7ಆಹಾ, ಮುಂದಿನ ಕಾಲದಲ್ಲಿ ಜನರು, <<ಇಸ್ರಾಯೇಲರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು,8ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.>> ಇದು ಯೆಹೋವನ ನುಡಿ.ಸುಳ್ಳು ಪ್ರವಾದಿಗಳನ್ನು ಖಂಡಿಸಿದ್ದು
9ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ.ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ.
ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.
10ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ.ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ.
11ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು.ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.
12ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು.ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು ಎಂದು ಯೆಹೋವನು ನುಡಿಯುತ್ತಾನೆ.
13ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ;ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ.
14ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ.ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ.
ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.
15ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, <<ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು;ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ>> ಎಂದು ನುಡಿಯುತ್ತಾನೆ.
ಯೆಹೋವನು ಕೊಡುವ ಎಚ್ಚರಿಕೆ
16ಸೇನಾಧೀಶ್ವರನಾದ ಯೆಹೋವನು, <<ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ.ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.
17ನನ್ನನ್ನು ಅಸಡ್ಡೆಮಾಡುವವರಿಗೆ, <ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ> ಎಂದು ಹೇಳುತ್ತಲೇ ಇದ್ದಾರೆ.ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, <ನಿಮಗೆ ಯಾವ ಕೇಡೂ ಸಂಭವಿಸದು> ಎಂದು ನುಡಿಯುತ್ತಾರೆ.
18ಅವರಲ್ಲಿ ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ತಿಳಿದುಕೊಂಡಿದ್ದಾರೆ?ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ?
19ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ.ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.
20ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ.ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.
21ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು;ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.
22ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ,ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು>> ಎಂದು ಹೇಳುತ್ತಾನೆ.
23ಯೆಹೋವನು ಇಂತೆನ್ನುತ್ತಾನೆ, <<ನಾನು ಸಮೀಪದಲ್ಲಿ ಮಾತ್ರ ಇರುವ ದೇವರೋ?
24ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ?ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.>>
25ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.26ಇವರ ಪೂರ್ವಿಕರು ಬಾಳನನ್ನು ಪೂಜಿಸಿ, ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ, ತಾವು ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ.27ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು?28ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.29ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.ಯೆಹೋವನ ಭಾರ ಎಂದು ನುಡಿಯುವ ಜನರಿಗೆ ಆಗುವ ಶಿಕ್ಷೆ
30ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ.31ಆಹಾ, ತಮ್ಮ ನಾಲಿಗೆಗಳನ್ನು ಚಾಚಿ <<ಯೆಹೋವನು ನುಡಿಯುತ್ತಾನೆ>> ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.32ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.33ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ <<ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?>> ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, <<ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.34ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, <ಯೆಹೋವನ ಹೊರೆ> ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.35ನೀವು ನಿಮ್ಮ ನಿಮ್ಮ ನೆರೆಹೊರೆಯವರನ್ನೂ ಮತ್ತು ಅಣ್ಣತಮ್ಮಂದಿರನ್ನೂ, <ಯೆಹೋವನ ಉತ್ತರವೇನು, ಯೆಹೋವನು ಏನು ನುಡಿದಿದ್ದಾನೆ?>36ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.37ನೀವು <ಯೆಹೋವನಿಂದ ನಿನಗೆ ಯಾವ ಉತ್ತರವಾಯಿತು, ಯೆಹೋವನು ಏನು ನುಡಿದಿದ್ದಾನೆ> ಎಂದು ಪ್ರವಾದಿಯನ್ನು ಕೇಳಿರಿ.38ಒಂದು ವೇಳೆ ನೀವು <ಯೆಹೋವನ ಹೊರೆ> ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, <ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ,39ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.40ಮತ್ತು ನಾನು ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.> >>
24ಒಳ್ಳೆಯ ಮತ್ತು ಕೆಟ್ಟ ಹಣ್ಣುಗಳ ಸಾಮ್ಯ
1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬೆಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.2ಒಂದು ಪುಟ್ಟಿಯಲ್ಲಿ ಫಲ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು. ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.3ಆಗ ಯೆಹೋವನು ನನ್ನನ್ನು, <<ಯೆರೆಮೀಯನೇ, ಏನು ನೋಡುತ್ತೀ?>> ಎಂದು ಕೇಳಲು ನಾನು, <<ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ, ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ>> ಎಂದು ಉತ್ತರ ಕೊಟ್ಟೆನು.4ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.5<<ಇಸ್ರಾಯೇಲ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ, ಅವರಿಗೆ ಮೇಲನ್ನುಂಟುಮಾಡುವೆನು.6ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.7ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು>> ಎಂಬುದೇ.8ಇದಲ್ಲದೆ ಯೆಹೋವನು, <<ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.9ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.10ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು>> ಎಂದು ಹೇಳುತ್ತಾನೆ.
25ಯೆಹೂದ್ಯರ ದ್ರೋಹ
1ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,2ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇಮಿನವರಿಗೂ ಸಾರಿದನು.3ಆತನು, <<ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.4ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.5ಆತನು ನಿಮಗೆ ಹೇಳಿದ ಮಾತೇನೆಂದರೆ, <ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.6ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ> ಎಂಬುದೇ.7ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ>> ಎಂದು ಹೇಳಿದನು.ಎಪ್ಪತ್ತು ವರ್ಷಗಳ ಸೆರೆ
8ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ, <<ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ,9ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.10ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.11ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.12ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.13ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.14ಅನೇಕ ಜನಾಂಗಗಳೂ ಮತ್ತು ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಮತ್ತು ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು>> ಎಂಬುದೇ.ಯೆಹೋವನು ವಿಧಿಸುವ ದುರ್ಗತಿ
15ಇಸ್ರಾಯೇಲರ ದೇವರಾದ ಯೆಹೋವನು ನನಗೆ, <<ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.16ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು>> ಎಂದು ಅಪ್ಪಣೆಕೊಟ್ಟನು.17ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ, ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು.18ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.19ಅದು ಈ ದಿನ ನೆರವೇರಿದೆ. ಇದರೊಂದಿಗೆ ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು,20ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಹಾಳಾಗದೆ ಉಳಿದ ಸ್ವಲ್ಪ ಅಷ್ಡೋದ್,21ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು,22ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು, ಸಮುದ್ರದ ಆಚೆಯ ಕರಾವಳಿಯ ಅರಸರು,23ದೆದಾನ್ಯರು, ತೇಮಾ ದೇಶದವರು, ಬೂಜ್ ದೇಶದವರು, ಚಂಡಿಕೆ ಬಿಟ್ಟುಕೊಂಡಿರುವವರೆಲ್ಲರು,24ಅರಬಿಯದ ಎಲ್ಲಾ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯವರ ಎಲ್ಲಾ ಅರಸರು,25ಜಿಮ್ರಿಯ ಎಲ್ಲಾ ಅರಸರು, ಏಲಾಮಿನ ಎಲ್ಲಾ ಅರಸರು, ಮೇದ್ಯರ ಎಲ್ಲಾ ಅರಸರು,26ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ.27ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, <<ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.>>28ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ, ಕುಡಿಯಲಿಕ್ಕೂ ಕೇಳದಿದ್ದರೆ ನೀನು ಅವರಿಗೆ ಹೀಗೆ ಹೇಳು, <<ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನೀವು ಕುಡಿಯಲೇ ಬೇಕು.29ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ>> ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.30ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು,<<ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು.
ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು.
ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.
31ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು,ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ,
ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು>> ಇದು ಯೆಹೋವನ ನುಡಿ.
ಜನಾಂಗಕ್ಕೆ ಬರುವ ಕೇಡು
32ಸೇನಾಧೀಶ್ವರನಾದ ಯೆಹೋವನು, <<ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು.
33ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು;ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರು ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
ಯೆಹೂದ್ಯ ನಾಯಕರಿಗಾಗುವ ಶಿಕ್ಷೆ
34ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ!ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು;
ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.
35ಕುರುಬರು ಓಡಿಹೋಗುವುದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ನಾಯಕರು ತಪ್ಪಿಸಿಕೊಳ್ಳುವುದಕ್ಕೆ ಆಸ್ಪದ ದೊರೆಯದು.
36ಆಹಾ, ಕುರುಬರ ಕೂಗಾಟ! ಮಂದೆಯ ಹಿರಿಯ ನಾಯಕರ ಅರಚಾಟ!ಯೆಹೋವನು ಆ ಹುಲ್ಗಾವಲನ್ನು ಹಾಳುಮಾಡುತ್ತಿದ್ದಾನಲ್ಲಾ.
37ನೆಮ್ಮದಿಯ ಗೋಮಾಳಗಳು ಯೆಹೋವನ ರೋಷಾಗ್ನಿಯಿಂದ ನಿಶ್ಯಬ್ದವಾಗಿವೆ.
38ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ.ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ>> ಎಂದು ನುಡಿಯುತ್ತಾನೆ.
26ಯೆರೆಮೀಯನು ಮರಣದಿಂದ ಪಾರಾದ್ದದು
1ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.2<<ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.3ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.4ನೀನು ಅವರಿಗೆ, <ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,5ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,6ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು> >> ಎಂದು ಹೇಳು ಎಂದನು.7ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ ಕೇಳಿದರು.8ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, <<ನೀನು ಸಾಯಲೇಬೇಕು!9ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, <ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು> ಎಂದು ಏಕೆ ಹೇಳಿದೆ>> ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.10ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.11ಆಗ ಯಾಜಕರೂ ಮತ್ತು ಪ್ರವಾದಿಗಳೂ, <<ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ>> ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.12ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, <<ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.13ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.14ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವುದನ್ನು ನನಗೆ ಮಾಡಿರಿ.15ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ>> ಎಂದು ಹೇಳಿದನು.16ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, <<ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ>> ಎಂದು ಹೇಳಿದರು.17ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು,18<<ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, <ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು> ಎಂದು ಹೇಳಲಾಗಿ19ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ>> ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.20ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.21ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.22ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.23ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.24ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.
27ಬಾಬೆಲೋನಿಗೆ ಅಧೀನವಾಗಬೇಕೆಂದು ಯೆರೆಮೀಯನು ಎಚ್ಚರಿಸಿದ್ದು
1ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.2<<ಇದೇ ಯೆಹೋವನ ನುಡಿ, ನೀನು ಕಣ್ಣಿಗಳನ್ನೂ ಮತ್ತು ನೊಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು,3ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು.4ನೀನು ಆ ರಾಯಭಾರಿಗಳಿಗೆ, <ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬುದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು.>5<ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.6ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.7ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.8ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು> ಇದು ಯೆಹೋವನ ನುಡಿ.9<ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ> ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು.10ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.11ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.>>12ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, <<ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.13ನೀನೂ ನಿನ್ನ ಜನರೂ ಖಡ್ಗ ಕ್ಷಾಮ ಮತ್ತು ವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವುದೆಂದು ಯೆಹೋವನು ನುಡಿದಿದ್ದಾನಷ್ಟೆ.14<ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ> ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.15ಯೆಹೋವನು ಇಂತೆನ್ನುತ್ತಾನೆ, <ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.> >>16ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, <<ಯೆಹೋವನು ಇಂತೆನ್ನುತ್ತಾನೆ, <ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು> ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.17ಅವರ ಕಡೆಗೆ ಕಿವಿಗೊಡಲೇ ಬಾರದು; ಬಾಬೆಲಿನ ಅರಸನ ಅಡಿಯಾಳಾಗಿರಿ, ಬದುಕುವಿರಿ.18ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ, ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳು ಬಾಬೆಲೋನಿಗೆ ಹೋಗದಂತೆ ಬೇಡಿಕೊಳ್ಳಲಿ.19ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನಿಂದ ಬಾಬೆಲೋನಿಗೆ ಸೆರೆ ಒಯ್ದಾಗ ಕೆಲವು ಉಪಕರಣಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ.20ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು, ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ,21ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,22<ಅವು ಬಾಬೆಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.> >>
28ಯೆರೆಮೀಯನು ಹನನ್ಯನನ್ನು ಗದರಿಸಿದ್ದು
1ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,2<<ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, <ಬಾಬೆಲಿನ ಅರಸರು ನಿಮಗೆ ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.3ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬೆಲೋನಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.4<< <ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬೆಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.> >>5ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ,6<<ಹಾಗೆಯೇ ಆಗಲಿ, ಯೆಹೋವನು ಹಾಗೆಯೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ!7ಆದರೆ ನಾನು ನಿನ್ನ ಮತ್ತು ಸಕಲ ಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಕೇಳು,8ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.9ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು>> ಎಂದು ಹೇಳಿದನು.10ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿ ಎಲ್ಲಾ ಜನರ ಎದುರಿಗೆ,11<<ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು>> ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು.12ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದ ಮೇಲೆ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.13<<ನೀನು ಹೋಗಿ ಹನನ್ಯನಿಗೆ, ಯೆಹೋವನು ಹೀಗೆ ಹೇಳುತ್ತಾನೆ, <ನೀನು ಮರದ ನೊಗಗಳನ್ನು ಮುರಿದುಬಿಟ್ಟೆ, ಅವುಗಳಿಗೆ ಬದಲಾಗಿ14ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ> ಎಂದು ಹೇಳು>> ಎಂಬುದೇ.15ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, <<ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.16ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ>> ಎಂದು ಹೇಳಿದನು.17ಅದರಂತೆ ಪ್ರವಾದಿಯಾದ ಹನನ್ಯನು ಅದೇ ವರ್ಷ ಏಳನೆಯ ತಿಂಗಳಲ್ಲಿ ಸತ್ತನು.
29ಯೆರೆಮೀಯನು ಬಾಬೆಲಿನಲ್ಲಿ ಸೆರೆಯಾಗಿದ್ದವರಿಗೆ ಕಳುಹಿಸಿದ ಕಾಗದ
1ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬೆಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.2ಇದು ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇಮಿನ ಸರದಾರರು, ಶಿಲ್ಪಿಗಳು, ಕಮ್ಮಾರರು ಇವರು ಯೆರೂಸಲೇಮಿನಿಂದ ತೊಲಗಿದ ಮೇಲೆ ನಡೆದ ಸಂಗತಿಗಳು.3ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬೆಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು.4ಅದರಲ್ಲಿ, <<ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇಮಿನಿಂದ ಬಾಬೆಲೋನಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ,5ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ.6ಸಂಸಾರಿಗಳಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಮಕ್ಕಳಿಗೆ ಗಂಡುಮಕ್ಕಳನ್ನು ಕೊಡಿರಿ; ಅವರೂ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕೊರತೆ ಅನುಭವಿಸದಿರಿ.7ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.8ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.9ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ>> ಎಂದು ಬರೆಯಲ್ಪಟ್ಟಿತು.10ಯೆಹೋವನು ಇಂತೆನ್ನುತ್ತಾನೆ, <<ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.11ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.12ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.13ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.14ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ>> ಎಂಬುದೇ.15ನೀವೋ, <<ಯೆಹೋವನು ನಮಗಾಗಿ ಬಾಬೆಲಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾನಲ್ಲಾ>> ಅಂದುಕೊಂಡಿದ್ದೀರಿ.16ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ, ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲ ನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ,17<<ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.18ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.19ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.>>20ನಾನು ಯೆರೂಸಲೇಮಿನಿಂದ ಬಾಬೆಲೋನಿಗೆ ಸಾಗಿಸಿದ ಸೆರೆಯವರೇ, ನೀವೆಲ್ಲರೂ ಯೆಹೋವನ ವಾಕ್ಯವನ್ನು ಕೇಳಿರಿ.21ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, <<ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.22ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು <ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ> ಎಂದು ಶಪಿಸುವರು.23ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ>> ಎಂಬುದೇ.ಶೆಮಾಯನ ಆಕ್ಷೇಪಣೆ, ಯೆರೆಮೀಯನ ಉತ್ತರ
24ಆಮೇಲೆ ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನ್ನು ಕೊಟ್ಟನು, ನೀನು ನೆಹೆಲಾಮ್ಯನಾದ ಶೆಮಾಯನಿಗೆ ಹೀಗೆ ತಿಳಿಸಬೇಕು,25ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ, ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ,26<<ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.27ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ?28ಇವನು, <ಪರದೇಶ ವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ> ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬುದಾಗಿ ಬರೆದ ಕಾರಣ ನಾನು ನಿನ್ನನ್ನು ದಂಡಿಸುವುದು ಖಂಡಿತ.>>29ಯಾಜಕನಾದ ಚೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನು.30ಅನಂತರ ಯೆರೆಮೀಯನಿಗೆ ಯೆಹೋವನು ಈ ಮಾತುಗಳನ್ನು ತಿಳಿಸಿದನು.31ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, <<ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ,32ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ>> ಎಂಬುದೇ.
30ಸುಸ್ಥಿತಿಗೆ ತರುವ ವಾಗ್ದಾನ
1ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,2<<ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ನೀನು ಗ್ರಂಥವಾಗಿ ಬರೆ.3ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ>> ಎಂಬುದೇ.ಇಸ್ರಾಯೇಲಿಗೆ ಸಂಭವಿಸುವ ಬಾಧೆಯೂ ಉದ್ಧಾರವೂ
4ಯೆಹೋವನು ಇಸ್ರಾಯೇಲಿನ ಮತ್ತು ಯೆಹೂದದ ವಿಷಯವಾಗಿ ಈ ಮಾತುಗಳನ್ನು ಹೇಳಿದನು,5<<ಯೆಹೋವನು ಇಂತೆನ್ನುತ್ತಾನೆ,ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;
6ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ?ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?
7ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ,ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.>>
8ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.9ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.>>10ಯೆಹೋವನು ಇಂತೆನ್ನುತ್ತಾನೆ, <<ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ!ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು.
ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.>>
11ಯೆಹೋವನು ಇಂತೆನ್ನುತ್ತಾನೆ, <<ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ;ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು.
ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.>>
ಹಾಳಾಗಿ ಹೋದ ಚೀಯೋನನ್ನು ಯೆಹೋವನು ಉನ್ನತಿಗೆ ತರುವುದು
12ಯೆಹೋವನು ಇಂತೆನ್ನುತ್ತಾನೆ, <<ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.
13ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ. 14ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು.ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.
15ಅಯ್ಯೋ, ನೋವು ನಿಲ್ಲದು ಎಂದು ನಿನ್ನ ಪೆಟ್ಟಿಗಾಗಿ ಏಕೆ ಅರಚಿಕೊಳ್ಳುತ್ತೀ?ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು.
16ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು.ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.>>
17ಯೆಹೋವನು ಇಂತೆನ್ನುತ್ತಾನೆ, <<ಇಗೋ, <ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ> ಎಂದು ಜನರು ಹೇಳಿ,ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.>>
18ಯೆಹೋವನು ಹೀಗೆನ್ನುತ್ತಾನೆ, <<ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು.ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.
19ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು.ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು.
20ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವುದು,ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವುದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು.
21ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು.ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು.
ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.>>
22ನೀವು ನನ್ನ ಜನರಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.ಯೆಹೋವನ ರೋಷವೆಂಬ ಬಿರುಗಾಳಿ
23ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು ಹೊರಟಿದೆ;ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.
24ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು,ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.
31ಇಸ್ರಾಯೇಲ್ ಸೆರೆಯಿಂದ ಹಾಯಾಗಿ ಹಿಂದಿರುಗುವುದು
1ಯೆಹೋವನು, <<ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು>> ಎಂದು ಹೇಳುತ್ತಾನೆ.
2ಕರ್ತನಾದ ಯೆಹೋವನು, <<ಖಡ್ಗಕ್ಕೆ ಹತರಾಗದೆ ಉಳಿದ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯುವುದು;ಇಸ್ರಾಯೇಲ್ ವಿಶ್ರಾಂತಿಯನ್ನು ಹುಡುಕುವುದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು,
3<ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ, 4ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು.ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.
5ನೀನು ತಿರುಗಿ ಸಮಾರ್ಯದ ಗುಡ್ಡಗಳಲ್ಲಿ ದ್ರಾಕ್ಷಿತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನು ಅನುಭವಿಸುವರು.
6ಒಂದು ದಿನವು ಬರುವುದು, ಆಗ ಎಫ್ರಾಯೀಮಿನ ಗುಡ್ಡಗಳ ಮೇಲಿರುವ ಕಾವಲುಗಾರರು, ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ> ಎಂದು ಕೂಗುವರು>> ಎಂದು ಹೇಳುವನು. 7ಯೆಹೋವನು ಇಂತೆನ್ನುತ್ತಾನೆ, <<ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ.ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.
8ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು.ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.
9ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು.ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು.
ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.
10ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ,ದೂರ ದ್ವೀಪಗಳಲ್ಲಿ ಸಾರಿರಿ!
ಇಸ್ರಾಯೇಲರನ್ನು ಚದರಿಸಿದಾತನು, <ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು> ಎಂದು ಪ್ರಕಟಿಸಿರಿ.
ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ,
11ಅವರಿಗಿಂತ ಬಲಿಷ್ಠರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ. 12ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು.ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು.
ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.
13ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು;ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು.
ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ,
ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.
14ಯಾಜಕರನ್ನು ಮೃಷ್ಟಾನ್ನಭೋಜನದಿಂದ ತೃಪ್ತಿಗೊಳಿಸುವೆನು;ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.>>
ರಾಹೇಲಳ ಪ್ರಲಾಪ; ಯೆಹೋವನ ಸಮಾಧಾನ
15ಯೆಹೋವನು ಇಂತೆನ್ನುತ್ತಾನೆ, <<ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ,ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.>>
16ಯೆಹೋವನು, <<ನಿನ್ನ ಧ್ವನಿಯು ಗೋಳಾಟದ ಸ್ವರವಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ.ನಿನ್ನ ಪ್ರಯಾಸವು ಸಾರ್ಥಕವಾಗುವುದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು>> ಎನ್ನುತ್ತಾನೆ.
17ಯೆಹೋವನು ಇಂತೆನ್ನುತ್ತಾನೆ, <<ನಿನಗೆ ಮುಂದೆ ಒಳ್ಳೆಯ ಗತಿಯಾಗುವುದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು. 18ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, <ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು.ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.
19ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು .ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.> >>
20ಯೆಹೋವನು ಇಂತೆನ್ನುತ್ತಾನೆ, <<ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ?ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.
21ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ;ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ.
ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.
22ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ?ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.>>
ಯೆಹೂದದ ಮತ್ತು ಇಸ್ರಾಯೇಲಿನ ಮುಂದಿನ ಸಂತತಿ
23ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, <<ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, <ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ> ಎಂದು ಮತ್ತೆ ಮಾತನಾಡುವರು.24ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು.25ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ>> ಎಂಬುದೇ.26ಇದಾದ ಮೇಲೆ ನಾನು ಎಚ್ಚೆತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.27ಕರ್ತನಾದ ಯೆಹೋವನು, <<ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು.28ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.29<ಹೆತ್ತವರು ಹುಳಿದ್ರಾಕ್ಷಿಯನ್ನು ತಿಂದರು, ಅದರಿಂದ ಮಕ್ಕಳ ಹಲ್ಲುಗಳು ಚಳಿತುಹೋಗಿವೆ> ಎಂದು ಆ ಕಾಲದಲ್ಲಿ ಜನರು ಮತ್ತೆ ಹೇಳುವುದಿಲ್ಲ.30ಸಾಯತಕ್ಕವನು ತನ್ನ ತನ್ನ ದೋಷದಿಂದ ಸಾಯುವನು. ಹುಳಿದ್ರಾಕ್ಷಿಯನ್ನು ತಿನ್ನುವವನ ಹಲ್ಲುಗಳೇ ಚಳಿತುಹೋಗುವವು>> ಎಂದು ಹೇಳುತ್ತಾನೆ.ಯೆಹೋವನು ತನ್ನ ಜನರೊಂದಿಗೆ ಮಾಡಿಕೊಳ್ಳುವ ಹೊಸ ಒಡಂಬಡಿಕೆ
31ಯೆಹೋವನು ಇಂತೆನ್ನುತ್ತಾನೆ, <<ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.32ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.33ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.34ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, <ಯೆಹೋವನ ಜ್ಞಾನವನ್ನು ಪಡೆಯಿರಿ> ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ>> ಎಂಬುದೇ.ಯೆಹೋವನು ಇಸ್ರಾಯೇಲನ್ನು ಎಂದಿಗೂ ತ್ಯಜಿಸನು
35ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ,ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ,
ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ,
36<<ಈ ಕಟ್ಟಳೆಗಳು ನನ್ನ ಪರಾಂಬರಿಕೆಗೆ ಬಾರದೆ ತೊಲಗಿ ಹೋದರೆ,ಆಗ ಇಸ್ರಾಯೇಲ್ ಸಂತಾನವು ನನ್ನ ಪರಾಂಬರಿಕೆಗೆ ಒಳಗಾಗದೆ ಎಂದಿಗೂ ಜನಾಂಗವಾಗದೆ ಹೋಗುವುದು.>>
37ಯೆಹೋವನು, <<ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ,ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿಮಿತ್ತ,
ನಾನು ಆ ವಂಶವನ್ನು ನಿರಾಕರಿಸಿಬಿಡುವೆನು>> ಎಂದು ಹೇಳುತ್ತಾನೆ.
ಯೆರೂಸಲೇಮಿಗೆ ಆಗುವ ಅಭಿವೃದ್ಧಿ
38ಯೆಹೋವನು, <<ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವುದು.39ಅಳತೆಯ ನೂಲು ಇನ್ನು ಮೇಲೆ ಗಾರೇಬ್ ಗುಡ್ಡದ ತನಕ ನೆಟ್ಟಗೆ ಎಳೆಯಲ್ಪಟ್ಟು, ಗೋಯದ ಕಡೆಗೆ ತಿರುಗುವುದು.40ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ>> ಎನ್ನುತ್ತಾನೆ.
32ಯೆರೆಮೀಯನು ಹೊಲವನ್ನು ಕೊಂಡುಕೊಂಡದ್ದು
1ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಯೆಹೋವನು ಯೆರೆಮೀಯನಿಗೆ ತನ್ನ ವಾಕ್ಯವನ್ನು ದಯಪಾಲಿಸಿದನು.2ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.3ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, <<ನೀನು ಪ್ರವಾದನೆ ಮಾಡುತ್ತಾ, <ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.4ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು.5ಆ ಅರಸನು ಚಿದ್ಕೀಯನನ್ನು ಬಾಬೆಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?> >> ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.6ಅದಕ್ಕೆ ಯೆರೆಮೀಯನು, <<ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,7ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು <ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು> >> ಎಂದು ತಿಳಿಸಿದನು.8ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, <<ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ>> ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.9ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆನು.10ಪತ್ರಕ್ಕೆ ಸಹಿ ಹಾಕಿ ಮುಚ್ಚಿ ಆ ಮುಚ್ಚಳಕ್ಕೆ ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.11ಆ ಮೇಲೆ ನಾನು ಕ್ರಯಪತ್ರವನ್ನು ಅಂದರೆ ನಿಯಮ ಮತ್ತು ಷರತ್ತುಗಳಿಂದ ಮುಚ್ಚಿದ್ದ ಪತ್ರವನ್ನೂ ಹಾಗು ಮುಚ್ಚಳದ ಪತ್ರವನ್ನೂ ತೆಗೆದುಕೊಂಡೆನು.12ಅದನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ಸಹಿಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.13ಅವರೆಲ್ಲರ ಮುಂದೆ ನಾನು ಬಾರೂಕನಿಗೆ,14<<ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, <ನೀನು ಈ ಕ್ರಯಪತ್ರಗಳನ್ನು, ಅಂದರೆ ಮುಚ್ಚಿದ ಪತ್ರವನ್ನೂ ಮತ್ತು ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಬಹು ದಿನ ಇರುವ ಹಾಗೆ ಅದನ್ನು ಮಡಿಕೆಯಲ್ಲಿ ಬಚ್ಚಿಡು.15ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ> >> ಎಂದು ಖಂಡಿತವಾಗಿ ಹೇಳಿದೆನು.ಯೆರೆಮೀಯನ ವಿಜ್ಞಾಪನೆ
16ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನ ಕೈಗೆ ಕೊಟ್ಟ ಮೇಲೆ ನಾನು ಯೆಹೋವನಿಗೆ,17<<ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.18ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.19ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.20ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.21ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.22ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.23ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.24ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.25ಕರ್ತನಾದ ಯೆಹೋವನೇ, ನೀನು ನನಗೆ, <ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ> ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ>> ಎಂದು ವಿಜ್ಞಾಪನೆ ಮಾಡಿದೆನು.ಯೆಹೋವನ ಉತ್ತರ
26ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,27<<ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?28ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.29ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.30ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ. ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ, ಇದು ಯೆಹೋವನ ನುಡಿ.31ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪರೋಷಗಳಿಗೆ ಆಸ್ಪದವಾಗಿದೆ.32ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.33ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.34ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ.35ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ>> ಎಂಬುದೇ.36ಹೀಗಿರಲು <<ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,37<ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.38ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.39ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.40ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು> ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.41ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.>>42ಯೆಹೋವನು ಇಂತೆನ್ನುತ್ತಾನೆ, <<ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.43ಜನ ಮತ್ತು ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಂಡುಕೊಳ್ಳುವರು, ಕೊಡುವರು.44ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.>> ಇದು ಯೆಹೋವನ ನುಡಿ.
33ಪುನಃಸ್ಥಾಪನೆಯ ವಾಗ್ದಾನ
1ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು.2<<ಕಾರ್ಯವನ್ನು ಸಾಧಿಸಿಕೊಳ್ಳುವ, ಉದ್ದೇಶಿಸಿ ನೆರವೇರಿಸುವ ಯೆಹೋವನಾಮಾಂಕಿತನು ಇಂತೆನ್ನುತ್ತಾನೆ,3<ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.4ದಿಬ್ಬಗಳಿಗೂ ಮತ್ತು ಕತ್ತಿಗಳಿಗೂ ಅಡ್ಡವಾಗಿ ಗೋಡೆಯನ್ನು ಕಟ್ಟಲು ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ, ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ,5ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವುದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪ ರೋಷಭರಿತನಾದ ನಾನೇ ಇವರನ್ನು ಹತಿಸುವೆನು.6ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.7ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.8ಅವರು ನನ್ನ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡೆಸಿರುವ ಅಪರಾಧಗಳನ್ನೆಲ್ಲಾ ಕ್ಷಮಿಸುವೆನು.9ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.> >>10ಯೆಹೋವನು ಇಂತೆನ್ನುತ್ತಾನೆ, <<ಜನ ಮತ್ತು ಪಶುಗಳಿಲ್ಲದೆ ಹಾಳಾಗಿದೆ ಎಂದು ನೀವು ಹೇಳುವ ಈ ಸ್ಥಳದಲ್ಲಿ, ಅಂದರೆ ಜನ, ಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇಮಿನ ಬೀದಿಗಳಲ್ಲಿ,11ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.>>12ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.13ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ>> ಎಂಬುದೇ.ದಾವೀದನ ಸಂತತಿಯ ಧರ್ಮದ ಆಳ್ವಿಕೆ
14ಯೆಹೋವನು ಇಂತೆನ್ನುತ್ತಾನೆ, <<ಆಹಾ, ನಾನು ಇಸ್ರಾಯೇಲ್ ಮತ್ತು ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.15ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು.16ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; <ಯೆಹೋವ ಚಿದ್ಕೇನು> ಅಂದರೆ ಯೆಹೋವನೇ <ನಮ್ಮ ಸದ್ಧರ್ಮ> ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.>>17ಯೆಹೋವನು ಇಂತೆನ್ನುತ್ತಾನೆ, <<ದಾವೀದನ ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು.18ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.>>19ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,20<<ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ,21ಆಗ ನನ್ನ ದಾಸನಾದ ದಾವೀದನಿಗೂ, ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತು ಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.22ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.>>23ಇದಲ್ಲದೆ ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,24<<ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.25ಯೆಹೋವನು ಇಂತೆನ್ನುತ್ತಾನೆ, ಹಗಲಿರುಳೆಂಬ ನನ್ನ ನಿಬಂಧನೆಯು ಸ್ಥಿರವಾಗಿ ನಿಲ್ಲದಿದ್ದರೆ, ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ವಿಧಿಸಿದವನಲ್ಲದಿದ್ದರೆ,26ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.>>
34ಯೆರೆಮೀಯನು ಅನುಭವಿಸಿದ ಹಿಂಸೆಗಳೂ ಮಾಡಿದ ಪ್ರವಾದನೆಗಳೂ
ಯೆರೆಮೀಯನು ಚಿದ್ಕೀಯನನ್ನು ಎಚ್ಚರಿಸಿದ್ದು
1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.2ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, <<ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, <ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.3ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬೆಲೋನಿಗೆ ಗಡಿ ಪಾರಾಗುವಿ.4ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಗೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ, ನೀನು ಕೇಳಿ ಕೈಕೊಂಡರೆ ಖಡ್ಗದಿಂದ ಹತನಾಗುವುದಿಲ್ಲ; ಸುಖವಾಗಿ ಸಾಯುವಿ.5ನಿನಗಿಂತ ಮುಂಚಿನ ನಿನ್ನ ಪೂರ್ವಿಕರಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ> >> ಎಂದನು.6ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.7ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.ಯೆರೆಮೀಯನು ಯೆರೂಸಲೇಮಿನವರನ್ನು ಖಂಡಿಸಿದ್ದು
8ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,9<<ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸ ದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ>> ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.10ಆಗ ತಾವು ತಮ್ಮ ತಮ್ಮ ದಾಸ, ದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಮತ್ತು ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು.11ಆದರೆ ಸ್ವಲ್ಪ ಸಮಯವಾದ ಮೇಲೆ ಮನಸ್ಸನ್ನು ಬೇರೆ ಮಾಡಿಕೊಂಡು ತಾವು ಬಿಟ್ಟಿದ್ದವರನ್ನು ಪುನಃ ದಾಸ, ದಾಸಿಯರನ್ನಾಗಿ ಅಧೀನಮಾಡಿಕೊಂಡರು.12ಹೀಗಿರಲು ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,13<<ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ14<ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು> ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.15ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.16ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ>> ಎಂಬುದೇ.17ಆದಕಾರಣ ಯೆಹೋವನು, <<ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.18ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಮುಂದೆ ಮಾಡಿದ ಒಡಂಬಡಿಕೆಯನ್ನು ಮೀರಿದವರಿಗೆ ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗುವ ಗತಿ ಬರುವಂತೆ ಮಾಡುವೆನು.19ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇಮಿನ ಪ್ರಧಾನರು, ಕಂಚುಕಿಗಳು, ಯಾಜಕರು,20ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.21ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು>> ಎನ್ನುತ್ತಾನೆ.22ಯೆಹೋವನು, <<ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು>> ಎಂದು ನುಡಿಯುತ್ತಾನೆ.
35ರೇಕಾಬ್ಯರ ವಿಧೇಯತೆ, ಯೆಹೂದ್ಯರ ಅವಿಧೇಯತೆ
1ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,2<<ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು>> ಎಂಬುದೇ.3ಆಗ ಪ್ರವಾದಿಯು ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲಾ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ4ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು.5ಆ ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ, ಪಂಚಪಾತ್ರೆಗಳನ್ನೂ ಇಟ್ಟು, <<ದ್ರಾಕ್ಷಾರಸವನ್ನು ಕುಡಿಯಿರಿ>> ಅಂದನು.6ಅದಕ್ಕೆ ಅವರು, <<ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ, ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ, <ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸ ಕುಡಿಯಬಾರದು,7ಮನೆಕಟ್ಟಬಾರದು, ಬೀಜ ಬಿತ್ತಬಾರದು, ದ್ರಾಕ್ಷಿತೋಟ ಮಾಡಬಾರದು, ಅನುಭವಿಸಲೂ ಬಾರದು, ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು, ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗವುದು> >> ಎಂದು ಅಪ್ಪಣೆಕೊಟ್ಟಿದ್ದಾನೆ.8ನಮ್ಮ ಪಿತೃವಾದ ರೇಕಾಬನ ಮಗನಾಗಿರುವ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು, ಎಲ್ಲಾ ವಿಷಯದಲ್ಲಿಯೂ ಕೈಗೊಳ್ಳುತ್ತಿದ್ದೇವೆ; ನಾವಾಗಲಿ, ನಮ್ಮ ಹೆಂಡತಿಯರಾಗಲಿ, ಗಂಡು ಹೆಣ್ಣುಮಕ್ಕಳಾಗಲಿ ಜೀವಮಾನದಲ್ಲೆಲ್ಲಾ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.9ನಮ್ಮ ವಾಸಕ್ಕೆ ಮನೆಯನ್ನು ಕಟ್ಟುವುದಿಲ್ಲ; ನಮಗೆ ದ್ರಾಕ್ಷಿತೋಟ, ಹೊಲ ಮತ್ತು ಬೀಜಗಳೂ ಇಲ್ಲ.10ನಾವು ಗುಡಾರಗಳಲ್ಲಿ ವಾಸಿಸುತ್ತಾ ನಮ್ಮ ಪಿತೃವಾದ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲಾ ಶಿರಸಾವಹಿಸಿ ನಡೆಸುತ್ತಿದ್ದೇವೆ.11ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ, <<ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇಮಿಗೆ ಹೋಗೋಣ ಬನ್ನಿ ಎಂದುಕೊಂಡು ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದೇವೆ>> ಎಂದು ಹೇಳಿದರು.12ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,13<<ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆ ಹೇಳು, <ಇದರಿಂದ ನೀವು ಬುದ್ಧಿತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೋ?> ಎಂದು ಯೆಹೋವನು ಅನ್ನುತ್ತಾನೆ.14ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.15ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.16ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದುದರಿಂದ,17ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ>> ಎಂಬುದೇ.18ಮತ್ತು ಯೆರೆಮೀಯನು ರೇಕಾಬ್ಯರಿಗೆ, <<ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, <ನೀವು ನಿಮ್ಮ ಪಿತೃವಾದ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಸಕಲ ವಿಧಿಗಳನ್ನು ಅನುಸರಿಸಿ ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ,19ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖದಲ್ಲಿ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ> >> ಎಂಬುದೇ.
36ಯೆರೆಮೀಯನ ಪ್ರವಾದನೆಯ ಸುರುಳಿಯನ್ನು ಓದಿದ್ದು
1ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ,2<<ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.3ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು>> ಎಂಬ ಮಾತನ್ನು ತಿಳಿಸಿದನು.4ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ಹೇಳಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.5ಮತ್ತು ಯೆರೆಮೀಯನು ಬಾರೂಕನಿಗೆ, <<ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;6ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.7ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ>> ಎಂದು ಅಪ್ಪಣೆಕೊಟ್ಟನು.8ನೇರೀಯನ ಮಗನಾದ ಬಾರೂಕನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಯೆಹೋವನ ಆಲಯದೊಳಗೆ ಓದಿ ಪ್ರವಾದಿಯಾದ ಯೆರೆಮೀಯನು ಆಜ್ಞಾಪಿಸಿದಂತೆ ಮಾಡಿದನು.9ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.10ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.11ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನೆಲ್ಲಾ ಕೇಳಿ, ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು.12ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.13ಮೀಕಾಯನು ಜನರ ಮುಂದೆ ಗ್ರಂಥವನ್ನು ಓದುತ್ತಿರುವ ಬಾರೂಕನ ಬಾಯಿಂದ ತಾನು ಕೇಳಿದ್ದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಲು,14ಸಕಲ ಪ್ರಧಾನರು ಬಾರೂಕನಿಗೆ, <<ನೀನು ಜನರ ಮುಂದೆ ಓದಿದ ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ>> ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿ ಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.15ಅವರು ಅವನಿಗೆ, <<ದಯಮಾಡಿ ಕುಳಿತುಕೊಂಡು ನಮ್ಮ ಮುಂದೆ ಓದು>> ಎಂದು ಹೇಳಲು ಬಾರೂಕನು ಅದನ್ನು ಅವರ ಮುಂದೆ ಓದಿದನು.16ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, <<ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು>> ಎಂದು ಬಾರೂಕನಿಗೆ ಹೇಳಿದರು.17ಮತ್ತು, <<ನೀನು ಈ ಮಾತುಗಳನ್ನೆಲ್ಲಾ ಹೇಗೆ ಬರೆದಿ? ಅವನ ಬಾಯಿಂದ ಬಂದ ಹಾಗೆತಾನೇ? ದಯಮಾಡಿ ನಮಗೆ ತಿಳಿಸು>> ಎಂದು ಅವನನ್ನು ಕೇಳಿದರು.18ಬಾರೂಕನು ಅವರಿಗೆ, <<ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಸಿಯಿಂದ ಈ ಪುಸ್ತಕದಲ್ಲಿ ಬರೆದೆನು>> ಎಂದು ಉತ್ತರಕೊಟ್ಟನು.19ಆಗ ಪ್ರಧಾನರು ಬಾರೂಕನಿಗೆ, <<ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು>> ಎಂದು ಹೇಳಿದನು.ಯೆಹೋಯಾಕೀಮನು ಪ್ರವಾದನೆಯ ಸುರುಳಿಯನ್ನು ಸುಟ್ಟದ್ದು
20ಅನಂತರ ಅವರು ಸುರುಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಆ ಮಾತುಗಳನ್ನೆಲ್ಲಾ ಅವನಿಗೆ ಅರಿಕೆ ಮಾಡಿದರು.21ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.22ಆಗ ಪುಷ್ಯಮಾಸ; ಅರಸನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯು ಉರಿಯುತ್ತಿತ್ತು.23ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.24ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.25ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, <<ದಯಮಾಡಿ ಸುರುಳಿಯನ್ನು ಸುಡಬಾರದು>> ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.26ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.ಯೆರೆಮೀಯನ ಎರಡನೆಯ ಸುರುಳಿ
27ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಮಾತುಗಳ ಸುರುಳಿಯನ್ನು ಅರಸನು ಸುಟ್ಟುಬಿಟ್ಟ ಮೇಲೆ ಯೆಹೋವನು ಯೆರೆಮೀಯನಿಗೆ,28<<ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು.29ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, <ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.30ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.31ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು> >> ಎಂದು ಹೇಳಿದನು.32ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂತಹ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.
37ಚಿದ್ಕೀಯನು ಯೆರೆಮೀಯನಿಗೆ ಮಾಡಿದ ಮನವಿ
1ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು.2ಆಗ ಅವನಾಗಲಿ, ಅವನ ಸೇವಕರಾಗಲಿ ಅಥವಾ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು.3ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, <<ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು>> ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.4ಆ ಕಾಲದಲ್ಲಿ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ; ಜನರಲ್ಲಿ ಹೋಗುತ್ತಾ ಬರುತ್ತಾ ಇದ್ದನು.5ಆಗ ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತ್ತು; ಇದನ್ನು ಕೇಳಿ ಯೆರೂಸಲೇಮನ್ನು ಮುತ್ತಿದ್ದ ಕಸ್ದೀಯರು ಬಿಟ್ಟು ಹೋಗಿದ್ದರು.6ಹೀಗಿರಲು ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು.7<<ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, <ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.8ಕಸ್ದೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು> >> ಎಂಬುದು.9ಯೆಹೋವನು ಇಂತೆನ್ನುತ್ತಾನೆ, <<ಕಸ್ದೀಯರು ನಮ್ಮಿಂದ ತೊಲಗಿ ಹೋಗುವುದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವುದೇ ಇಲ್ಲ.10ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.>>ಪ್ರಧಾನರು ಯೆರೆಮೀಯನನ್ನು ಸೆರೆಗೆ ಹಾಕಿಸಿದ್ದು
11ಕಸ್ದೀಯರ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಯೆರೂಸಲೇಮನ್ನು ಬಿಟ್ಟುಹೋದರು.12ಆಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ ತನಗೆ ಬರಬೇಕಾದ ಸ್ವತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಯೆರೂಸಲೇಮಿನಿಂದ ಹೊರಟನು.13ಅವನು ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಯ ವಿಚಾರಕನಾಗಿದ್ದು ಪ್ರವಾದಿಯಾದ ಯೆರೆಮೀಯನನ್ನು ಹಿಡಿದು, <<ನೀನು ಕಸ್ದೀಯರಲ್ಲಿ ಮೊರೆಹೋಗಲು ಹೋಗುತ್ತಿದ್ದಿ>> ಎಂದು ಹೇಳಿದನು.14ಅದಕ್ಕೆ ಯೆರೆಮೀಯನು, <<ಅದು ಸುಳ್ಳು, ನಾನು ಕಸ್ದೀಯರಲ್ಲಿ ಮೊರೆಹೋಗುವವನಲ್ಲ>> ಎನ್ನಲು ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಹಿಡಿದು ಪ್ರಧಾನರ ಬಳಿಗೆ ಕರೆತಂದನು.15ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.16ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿನಗಳು ಇದ್ದನು.17ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, <<ಯೆಹೋವನಿಂದ ದೈವೋಕ್ತಿಯು ದೊರೆಯಿತೋ?>> ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, <<ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ>> ಅಂದನು.18ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ, <<ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ, ನಿನ್ನ ಸೇವಕರಿಗಾಗಲಿ ಅಥವಾ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?19ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?20ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ>> ಎಂದು ಅರಿಕೆಮಾಡಿದನು.21ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.
38ಎಬೆದ್ಮೆಲೆಕನು ಯೆರೆಮೀಯನನ್ನು ಬಾವಿಯಿಂದ ರಕ್ಷಿಸಿದ್ದು
1ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರು ಯೆರೆಮೀಯನ ಮಾತುಗಳನ್ನು ಕೇಳುತ್ತಿದ್ದರು.2ಯೆರೆಮೀಯನು ಸಮಸ್ತ ಜನರಿಗೆ, <<ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.3ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರಮಿಸುವನು; ಅದು ಅವನ ಸೈನ್ಯದ ವಶವಾಗುವುದು ಖಂಡಿತ>> ಎಂದು ಸಾರುತ್ತಿದ್ದನು.4ಆ ಮೇಲೆ ಆ ಪ್ರಧಾನರು ಅರಸನಿಗೆ, <<ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ>> ಎಂದು ಹೇಳಿದರು.5ಅದಕ್ಕೆ ಅರಸನಾದ ಚಿದ್ಕೀಯನು, <<ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ>> ಎಂದು ಹೇಳಿದನು.6ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.7ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.8ಆಗ ಅವನು ಅರಮನೆಯಿಂದ ಹೊರಟು ಬೆನ್ಯಾಮೀನಿನ ಬಾಗಿಲಿನಲ್ಲಿ ಕುಳಿತುಕೊಂಡಿದ್ದ ಅರಸನ ಬಳಿಗೆ ಹೋಗಿ,9<<ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ>> ಎಂದು ಅರಿಕೆಮಾಡಿದನು.10ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ, <<ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯುವುದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿ ರಕ್ಷಿಸು>> ಎಂದು ಅಪ್ಪಣೆಕೊಟ್ಟನು.11ಕೂಡಲೇ ಕೂಷ್ಯನಾದ ಎಬೆದ್ಮೆಲೆಕನು ಅವರನ್ನು ಕರೆದುಕೊಂಡು ಹೋಗಿ ಅರಮನೆಯನ್ನು ಹೊಕ್ಕು ಖಜಾನೆಯ ಕೆಳಗಿನ ಕೋಣೆಯಿಂದ ಜೀರ್ಣವಾದ ಹರಕು ಚಿಂದಿಬಟ್ಟೆಗಳನ್ನು ತೆಗೆದುಕೊಂಡು ಹಗ್ಗಗಳಂತೆ ಬಾವಿಯೊಳಗೆ ಯೆರೆಮೀಯನಿಗೆ ಮುಟ್ಟಿಸಿ,12<<ಜೀರ್ಣವಾದ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ>> ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.13ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.ಕಸ್ದೀಯರನ್ನು ಮೊರೆಹೋಗುವಂತೆ ಯೆರೆಮೀಯನು ಚಿದ್ಕೀಯನನ್ನು ಪ್ರೇರೇಪಿಸಿದ್ದು
14ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, <<ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ>>15ಎನ್ನಲು ಯೆರೆಮೀಯನು ಚಿದ್ಕೀಯನಿಗೆ, <<ನಾನು ನಿನಗೆ ತಿಳಿಸಿದರೆ ನನ್ನನ್ನು ಸಾಯಿಸಿಯೇ ಸಾಯಿಸುವಿ ಅಲ್ಲವೇ? ಆಲೋಚನೆ ಹೇಳಿದರೂ ನೀನು ಕೇಳುವುದಿಲ್ಲ>> ಎಂದು ಉತ್ತರಕೊಟ್ಟನು.16ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, <<ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸುವುದಿಲ್ಲ, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ>> ಎಂದು ರಹಸ್ಯವಾಗಿ ಪ್ರಮಾಣ ಮಾಡಿದನು.17ಆಗ ಯೆರೆಮೀಯನು ಚಿದ್ಕೀಯನಿಗೆ, <<ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ.18ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ>> ಎಂದು ಹೇಳಿದನು.19ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, <<ಕಸ್ದೀಯರು ತಮ್ಮನ್ನು ಮೊರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಬಹುದು ಎಂದು ಶಂಕೆಪಡುತ್ತೇನೆ>> ಎಂದು ಉತ್ತರಕೊಟ್ಟನು.20ಅದಕ್ಕೆ ಯೆರೆಮೀಯನು, <<ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.21ಆದರೆ ನೀನು, <ಶತ್ರುವಿನ ಮೊರೆಹೋಗೆನು> ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ.22ಯೆಹೂದದ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರೇಪಿಸಿ ಒಳಪಡಿಸಿಕೊಂಡಿದ್ದ ನಿನ್ನ ಆಪ್ತಮಿತ್ರರು ನಿನ್ನ ಕಾಲುಗಳ ಬದಿಯಲ್ಲಿ ಹೂತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಿಂದಿಸುವರು.23ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು>> ಎಂದು ಹೇಳಿದನು.24ಆಗ ಚಿದ್ಕೀಯನು ಯೆರೆಮೀಯನಿಗೆ, <<ಈ ಮಾತುಗಳು ಯಾರಿಗೂ ತಿಳಿಯದಿರಲಿ, ಜೋಕೆ; ತಿಳಿಯದಿದ್ದರೆ ನೀನು ಸಾಯುವುದಿಲ್ಲ.25ನಾನು ನಿನ್ನ ಸಂಗಡ ಮಾತನಾಡಿದ ಸುದ್ದಿಯನ್ನು ಪ್ರಧಾನರು ಕೇಳಿ ನಿನ್ನ ಬಳಿಗೆ ಬಂದು, <ನೀನು ಅರಸನಿಗೆ ಹೇಳಿದ್ದನ್ನು ನಮಗೆ ತಿಳಿಸು; ನಮಗೆ ಮರೆಮಾಡದಿದ್ದರೆ ನಿನ್ನನ್ನು ಕೊಲ್ಲುವುದಿಲ್ಲ; ಅರಸನು ನಿನಗೆ ಹೇಳಿದ್ದನ್ನೂ ತಿಳಿಸು> ಎಂದು ಪ್ರಶ್ನೆಮಾಡಬಹುದು.26ಆಗ ನೀನು ಅವರಿಗೆ, <ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು> ಎಂಬುದಾಗಿ ಹೇಳು>> ಎಂದು ಅಪ್ಪಣೆಕೊಟ್ಟೆನು.27ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆ ಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ.28ಯೆರೂಸಲೇಮು ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.
39ಯೆರೂಸಲೇಮಿನ ಪತನ
1ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.2ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು.3ಆಗ ನೇರ್ಗಲ್ ಸರೆಚರ್, ಸಮ್ಗರ್ ನೆಬೋ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಕಲ ಸರದಾರರೂ ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಆಸೀನರಾದರು.4ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.5ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.6ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.7ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬೆಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.8ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.9ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬೆಲೋನಿಗೆ ಸೆರೆಯೊಯ್ದನು.10ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.ಕಸ್ದೀಯರ ಮುಖ್ಯಾಧಿಕಾರಿಗಳು ಯೆರೆಮೀಯನನ್ನು ಕಾಪಾಡಿದ್ದು
11ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ,12<<ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು>> ಎಂದು ಅಪ್ಪಣೆಕೊಟ್ಟನು.13ಅದಕ್ಕೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು,14ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.ಎಬೆದ್ಮೆಲೆಕನಿಗೆ ಆದ ವಾಗ್ದಾನ
15ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು,16<<ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, <ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.17ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ.18ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ> >> ಎಂಬುದೇ.
40ಯೆರೆಮೀಯನ ಬಿಡುಗಡೆ
1ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬೆಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.2ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, <<ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.3ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.4ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲೋನಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬೆಲೋನಿಗೆ ಬರುವುದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವುದು ಸರಿಯೋ ಒಳ್ಳೆಯದೋ ಆ ಕಡೆ ಹೋಗು>> ಎಂದು ಹೇಳಿದನು.5ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, <<ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು>> ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.6ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯದಲ್ಲಿ ಅವನ ಸಂಗಡ ವಾಸಿಸಿದನು.ಯೆಹೂದದ ದೇಶಾಧಿಪತಿಯಾದ ಗೆದಲ್ಯ
7ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬೆಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.8ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.9ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, <<ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.10ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ>> ಎಂದು ಖಂಡಿತವಾಗಿ ಹೇಳಿದನು.11ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ12ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.ಗೆದಲ್ಯನ ಮರಣ
13ಆಮೇಲೆ ಕಾರೇಹನ ಮಗನಾದ ಯೋಹಾನಾನನೂ, ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.14ಅವರು, <<ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?>> ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.15ಆಗ ಕಾರೇಹನ ಮಗನಾದ ಯೋಹಾನಾನ ಮಿಚ್ಪದಲ್ಲಿದ್ದ ಗೆದಲ್ಯನಿಗೆ, <<ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವುದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವುದಲ್ಲಾ; ಏಕೆ ಹೀಗಾಗಬೇಕು?>> ಎಂದು ರಹಸ್ಯವಾಗಿ ವಿಜ್ಞಾಪಿಸಿದನು.16ಆಗ ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ, <<ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು>> ಎಂದು ಉತ್ತರಕೊಟ್ಟನು.
411ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.2ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇಮಿಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.3ಇದಲ್ಲದೆ ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ, ಅಲ್ಲಿ ಸಿಕ್ಕಿದ ಕಸ್ದೀಯರಾದ ಸೈನಿಕರನ್ನೂ ಹತ್ಯೆಮಾಡಿದನು.4ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು,5ಗಡ್ಡಬೋಳಿಸಿ, ಬಟ್ಟೆಹರಿದು ಗಾಯ ಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದು ಕೈಯಲ್ಲಿ ಧೂಪ ಮತ್ತು ನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.6ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಅವರ ಕಡೆಗೆ ಹೊರಟು ದಾರಿಯುದ್ದಕ್ಕೂ ಅಳುತ್ತಾ ನಡೆದು ಅವರನ್ನು ಎದರುಗೊಂಡು, <<ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಬನ್ನಿರಿ>> ಎಂದು ಹೇಳಿದನು.7ಅವರು ಊರೊಳಕ್ಕೆ ಬಂದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಮತ್ತು ಅವನ ಸಂಗಡಿಗರೂ ಅವರನ್ನು ಕೊಲ್ಲಿಸಿ ಬಾವಿಯಲ್ಲಿ ಹಾಕಿದರು.8ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, <<ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ>> ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.9ಇಷ್ಮಾಯೇಲನು ತಾನು ಗೆದಲ್ಯನ ಸಂಗಡ ಕೊಂದ ಇತರರ ಶವಗಳನ್ನು ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.10ಆ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನು ರಾಜಕುಮಾರ್ತೆಯರನ್ನು, ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮಿಚ್ಪದ ಉಳಿದ ಜನರನ್ನು ಸೆರೆಹಿಡಿದು ಅಮ್ಮೋನ್ಯರ ಸೀಮೆಗೆ ಹೊರಟನು.11ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ ಎಲ್ಲಾ ಕೆಡುಕನ್ನು ಕೇಳಿ,12ತಮ್ಮ ಸೈನಿಕರನ್ನೆಲ್ಲಾ ಕರೆದುಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು, ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಕಂಡರು.13ಆಗ ಇಷ್ಮಾಯೇಲನ ಸಂಗಡ ಇದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಮಸ್ತ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು.14ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಸಕಲ ಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು.15ನೆತನ್ಯನ ಮಗನಾದ ಇಷ್ಮಾಯೇಲನೋ ಎಂಟು ಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮೊರೆಹೊಕ್ಕನು.ಜನರು ಐಗುಪ್ತಕ್ಕೆ ವಲಸೆಹೋದದ್ದು
16ಆಗ ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಮಸ್ತ ಸೇನಾಧಿಪತಿಗಳೂ ತಾವು ನೆತನ್ಯನ ಮಗನಾದ ಇಷ್ಮಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಭಟರು, ಹೆಂಗಸರು, ಮಕ್ಕಳು, ಕಂಚುಕಿಗಳು, ಅಂತು ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದ ಮೇಲೆ ಮಿಚ್ಪದಿಂದ ಒಯ್ದ ಉಳಿದ ಜನರನ್ನೆಲ್ಲಾ ಕರೆದುಕೊಂಡು ಹೋದರು.17ಅವರು ಕಸ್ದೀಯರ ಭಯದಿಂದ ಐಗುಪ್ತಕ್ಕೆ ವಲಸೆಹೋಗಬೇಕೆಂದು ಬೇತ್ಲೆಹೇಮಿನ ಸಮೀಪವಾಗಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.18ಬಾಬೆಲಿನ ಅರಸನಿಂದ ದೇಶಕ್ಕೆ ಅಧಿಪತಿಯಾಗಿ ನೇಮಿಸಲ್ಪಟ್ಟವನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಕಸ್ದೀಯರಿಗೆ ಅಂಜಿದರು.
42ಜನರ ಬಿನ್ನಹ, ಯೆರೆಮೀಯನ ಉತ್ತರ
1ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು.2ಅವರು ಅವನಿಗೆ, <<ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.3ನಿನ್ನ ದೇವರಾದ ಯೆಹೋವನು ನಾವು ನಡೆಯಬೇಕಾದ ಮಾರ್ಗವನ್ನೂ, ಮಾಡತಕ್ಕ ಕಾರ್ಯವನ್ನೂ ತೋರಿಸುವ ಹಾಗೆ ನಮಗಾಗಿ ಅಂದರೆ ಉಳಿದಿರುವ ಈ ಜನರೆಲ್ಲರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು>> ಎಂದು ವಿಜ್ಞಾಪಿಸಿದರು.4ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, <<ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು>> ಎಂದು ಉತ್ತರಕೊಟ್ಟನು.5ಅವರು ಯೆರೆಮೀಯನಿಗೆ, <<ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ!6ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಥವಾ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವುದು>> ಎಂಬುದಾಗಿ ಹೇಳಿದರು.7ಹತ್ತು ದಿನಗಳಾದ ಮೇಲೆ ಯೆಹೋವನು ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು.8ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ, ಅವನೊಂದಿಗಿದ್ದ ಸಕಲ ಸೇನಾಧಿಪತಿಗಳನ್ನೂ, ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು,9<<ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆಮಾಡುವುದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ,10<ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.11ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ, ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ.12ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು> ಎಂದೆನು.13ಆದರೆ ನೀವು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡದೆ <ಈ ದೇಶದಲ್ಲಿ ನಾವು ನೆಲೆಸುವುದೇ ಇಲ್ಲ;14ಬೇಡವೇ ಬೇಡ; ನಾವು ಯುದ್ಧ ಕಾಣದೆ, ತುತ್ತೂರಿಯ ಶಬ್ದ ಕೇಳದೆ, ಅನ್ನದ ಕೊರತೆಯಿಂದ ಹಸಿವಾಗದೆ ಇರುವ ಐಗುಪ್ತ ದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು> ಎಂದುಕೊಂಡರೆ,15ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ, <ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,16ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ.17ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವುದು; ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವರು. ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.18ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.> >>ಯೆರೆಮೀಯನು ಜನರನ್ನು ಎಚ್ಚರಿಸಿದ್ದು
19<<ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, <ಐಗುಪ್ತಕ್ಕೆ ಹೋಗಬೇಡಿರಿ> ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.20ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, <ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು> ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.21ನಾನು ಯೆಹೋವನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.22ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ>> ಎಂದು ಹೇಳಿದನು.
43ಯೆರೆಮೀಯನ ಮಾತಿಗೆ ಅವಿಧೇಯರಾದ ಜನರು
1ಯೆರೆಮೀಯನು ಸಮಸ್ತ ಜನರನ್ನು ಸಂಬೋಧಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ತಿಳಿಸಿದನು.2ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, <<ನಿನ್ನ ಮಾತು ಸುಳ್ಳು, <ಐಗುಪ್ತಕ್ಕೆ ಹೋಗಿ ವಾಸಮಾಡಬಾರದು> ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ.3ಕಸ್ದೀಯರು ನಮ್ಮನ್ನು ಕೊಲ್ಲುವುದಕ್ಕೋ, ಬಾಬೆಲೋನಿಗೆ ಸೆರೆ ಒಯ್ಯುವುದಕ್ಕೋ ನಮ್ಮನ್ನು ಅವರ ಕೈಗೆ ಸಿಕ್ಕಿಸಬೇಕೆಂದು ನೇರೀಯನ ಮಗನಾದ ಬಾರೂಕನೇ ನಿನ್ನನ್ನು ನಮ್ಮ ಮೇಲೆ ನೂಕಿದ್ದಾನೆ>> ಎಂದು ಹೇಳಿದರು.4ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ, ಸಮಸ್ತ ಸೇನಾಧಿಪತಿಗಳೂ ಮತ್ತು ಸಕಲಜನರೂ ಕೇಳದೆಹೋದರು.5ಆಗ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದದ ಉಳಿದ ಜನರು, ಪ್ರವಾದಿಯಾದ ಯೆರೆಮೀಯನು,6ನೇರೀಯನ ಮಗನಾದ ಬಾರೂಕನು, ರಾಜಕುಮಾರ್ತೆಯರು ಅಂತು ಗಂಡಸರು, ಹೆಂಗಸರು, ಮಕ್ಕಳು,7ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ, ಸಕಲ ಸೇನಾಧಿಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ.ನೆಬೂಕದ್ನೆಚ್ಚರನು ಐಗುಪ್ತವನ್ನು ಸ್ವಾಧೀನಮಾಡಿಕೊಳ್ಳುವನು ಎಂದು ಯೆರೆಮೀಯನು ಮುಂತಿಳಿಸಿದ್ದು
8ಯೆರೆಮೀಯನು ತಹಪನೇಸಿನಲ್ಲಿರುವಾಗ ಯೆಹೋವನು ಈ ವಾಕ್ಯವನ್ನು ಅವನಿಗೆ ದಯಪಾಲಿಸಿದನು.9ಆತನು, <<ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿ ಬಿಟ್ಟು ಅವರಿಗೆ ಹೀಗೆ ಹೇಳು,10<ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಬಾಬೆಲಿನ ಅರಸನೂ, ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸುವನು.11ಅವನು ಬಂದು ಐಗುಪ್ತ ದೇಶವನ್ನು ಹೊಡೆಯುವನು. ಮರಣಕ್ಕೆ ನೇಮಕವಾದವರು ಮರಣಕ್ಕೆ, ಸೆರೆಗೆ ನೇಮಕವಾದವರು ಸೆರೆಗೆ, ಖಡ್ಗಕ್ಕೆ ನೇಮಕವಾದವರು ಖಡ್ಗಕ್ಕೆ ಗುರಿಯಾಗುವರು.12ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತ ದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.13ಐಗುಪ್ತ ದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ, ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.> >>
44ವಿಗ್ರಹಾರಾಧನೆ ನಿಮಿತ್ತ ವಿನಾಶ
1ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,2<<ಇಸ್ರಾಯೇಲಿನ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ಯೆರೂಸಲೇಮಿಗೂ, ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ.3ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.4ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, <ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ> ಎಂದು ಪ್ರಕಟಿಸುತ್ತಾ ಬಂದರೂ,5ಅವರು ಕಿವಿಗೊಟ್ಟು ಕೇಳಲಿಲ್ಲ, ಅನ್ಯದೇವತೆಗಳಿಗೆ ಧೂಪಹಾಕುವುದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ.6ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ.7ಹೀಗಿರಲು ಸೇನಾಧೀಶ್ವರಸ್ವಾಮಿಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ, ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವುದೇಕೆ? ಈ ದುರಾಚಾರದ ನಿಮಿತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯುವುದಿಲ್ಲ.8ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತ ದೇಶದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುವುದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ.9ನಿಮ್ಮ ಪೂರ್ವಿಕರು, ಯೆಹೂದದ ಅರಸರು, ಅವರ ಹೆಂಡತಿಯರು, ನೀವು ಮತ್ತು ನಿಮ್ಮ ಹೆಂಡತಿಯರು ಇವರೆಲ್ಲರೂ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ನಡೆಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?10ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.11<<ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.12ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.13ನಾನು ಯೆರೂಸಲೇಮಿನವರನ್ನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು.14ಐಗುಪ್ತಕ್ಕೆ ಹೋಗಿ ಪ್ರವಾಸ ಮಾಡುತ್ತಿರುವ ಯೆಹೂದದ ಉಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವುದಿಲ್ಲ; ಓಡಿಬರುವ ಸ್ವಲ್ಪ ಜನರೇ ಹೊರತು ಯಾರೂ ಹಿಂದಿರುಗುವುದಿಲ್ಲ.15<<ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ>> ಹೀಗೆ ಹೇಳಿದರು,16<<ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ.17ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.18ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.19ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?>> ಎಂದರು.20ಆಗ ಯೆರೆಮೀಯನು ಗಂಡಸರಿಗೂ, ಹೆಂಗಸರಿಗೂ ಅಂತು ತನಗೆ ಆ ಉತ್ತರಕೊಟ್ಟ ಎಲ್ಲಾ ಜನರಿಗೂ,21<<ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?22ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.23ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ, ನಿಬಂಧನೆಗಳನ್ನೂ, ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪ ಮಾಡಿ ಅನ್ಯದೇವತೆಗಳಿಗೆ ಧೂಪಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ>> ಎಂದನು.24ಇದಲ್ಲದೆ ಯೆರೆಮೀಯನು ಹೆಂಗಸರಿಗೂ, ಎಲ್ಲಾ ಜನರಿಗೂ ಹೀಗೆ ಹೇಳಿದನು, <<ಐಗುಪ್ತದಲ್ಲಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ.25ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!26ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, <ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.27ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗ, ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.28ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.29ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು.30ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ> >> ಎಂಬುದೇ.
45ಯೆಹೋವನು ಬಾರೂಕನನ್ನು ಗದರಿಸಿದ್ದು, ಧೈರ್ಯಗೊಳಿಸಿದ್ದು
1ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು.2<<ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ, <ನನ್ನ ಗತಿಯನ್ನು ಏನು ಹೇಳಲಿ?3ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು> ಎಂದು ನೀನು ಹೇಳಿದೆಯಲ್ಲಾ,4ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.5ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.>>
46ಐಗುಪ್ತದ ವಿಷಯವಾದ ದೈವೋಕ್ತಿ
1ಯೆಹೋವನು ಜನಾಂಗಗಳ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.2ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ:
3<<ಗುರಾಣಿ ಮತ್ತು ಖೇಡ್ಯಗಳನ್ನು ಸಿದ್ಧಮಾಡಿಕೊಂಡು ಯುದ್ಧಕ್ಕೆ ಹೊರಡಿರಿ!
4ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ. 5ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ.ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.
6ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು.ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ.
7ನೈಲ್ ನದಿಯಂತೆ ಉಬ್ಬಿಕೊಂಡಿರುವ ಇವರು ಯಾರು?ನೈಲ್ ನದಿಯ ಶಾಖೆಗಳ ಹಾಗೆ ತುಂಬಿತುಳುಕುವ ಈ ಪ್ರವಾಹವು ಯಾರದು?
8ಐಗುಪ್ತವೇ ನೈಲ್ ನದಿಯಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲ್ ನದಿಯ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ;<ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣದ ನಿವಾಸಿಗಳನ್ನು ನಾಶಮಾಡುವೆನು> ಅಂದುಕೊಳ್ಳುತ್ತದೆ.
9ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ!ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ!
10ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ;ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು.
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.
11ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು;ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.
12ನಿನ್ನ ಅವಮಾನದ ಸುದ್ದಿಯು ಜನಾಂಗಗಳಿಗೆ ಕೇಳಿಬಂದಿದೆ, ನಿನ್ನ ಕೂಗಾಟವು ಲೋಕದಲ್ಲೆಲ್ಲಾ ತುಂಬಿದೆ;ವೀರನು ವೀರನನ್ನು ಎಡವಿ ಇಬ್ಬರೂ ಬಿದ್ದಿದ್ದಾರೆ.
13ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತ ದೇಶವನ್ನು ಹೊಡೆಯುವನು>> ಎಂಬುದಾಗಿಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದನು.
14<<ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ,<ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ> ಎಂದು ಸಾರಿರಿ.
15ನಿನ್ನ ಬಸವ ಬಿದ್ದು ಹೋದದ್ದೇನು? ಯೆಹೋವನು ಅದನ್ನು ಕೆಡವಿದನು, ನಿಲ್ಲಲಾರದೆ ಹೋಯಿತು.
16ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ಮೇಲೆ ಬಿದ್ದು;<ನಾವು ಎದ್ದು ಜನ್ಮಭೂಮಿಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ> ಎಂದುಕೊಂಡರು.
17ಐಗುಪ್ತದ ಅರಸನಾದ ಫರೋಹನು ಧಡಮ್ಮನೆ ಬಿದ್ದವನು, ಸದಾವಕಾಶವನ್ನು ಉಪೇಕ್ಷಿಸಿದವನು>> ಎಂದು ಅಲ್ಲಿ ಕೂಗಿದರು. 18ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ,<<ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ,
ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು.
19ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು. 20ಐಗುಪ್ತವು ಅಂದವಾದ ಕಡಸಾಗಿದೆ; ತೊಣಚೆಯ ಹುಳಗಳು ಉತ್ತರ ದಿಕ್ಕಿನಿಂದ ಅದರ ಮೇಲೆ ಬಂದಿದೆ.21ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.22ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವುದು; ಶತ್ರುಗಳು ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅವರ ಮೇಲೆ ಬೀಳುವರು.23ಅವರು ಮಿಡತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದುಹಾಕುವರು, ಇದು ಯೆಹೋವನ ನುಡಿ.24ಐಗುಪ್ತವೆಂಬ ಯುವತಿಯು ಅವಮಾನಕ್ಕೆ ಗುರಿಯಾಗುವಳು; ಉತ್ತರ ದಿಕ್ಕಿನವರ ಕೈವಶವಾಗುವಳು>> ಎಂಬುದೇ.25ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.26ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.27ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.28ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.>> 47ಫಿಲಿಷ್ಟಿಯದ ವಿಷಯವಾದ ದೈವೋಕ್ತಿ
1ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.2ಯೆಹೋವನು ಇಂತೆನ್ನುತ್ತಾನೆ,<<ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ,
ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು.
ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.
3ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ,ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು.
4ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು;ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.
5<<ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ?6ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!7ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.>> 48ಮೋವಾಬಿನ ವಿಷಯವಾದ ದೈವೋಕ್ತಿ
1ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,<<ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ,
ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.
2ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ,<ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ> ಎಂದು ಆಲೋಚಿಸಿಕೊಂಡಿದ್ದಾರೆ.
ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು.
3<ಅಯ್ಯೋ, ಸೂರೆ ಹೋದೆವು, ಬಹು ನಾಶವಾದೆವು> ಎಂಬ ಕೂಗಾಟವು ಹೊರೊನಯಿಮಿನಿಂದ ಕೇಳಬರುತ್ತದೆ!
4ಮೋವಾಬಿಗೆ ಭಂಗವಾಯಿತು; ಅಲ್ಲಿ ದಿಕ್ಕುಗೆಟ್ಟವರು ಮೊರೆಯಿಟ್ಟಿದ್ದಾರೆ.
5ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದೆವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತದೆ. 6ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ, ಅಡವಿಯಲ್ಲಿನ ಜಾಲಿಯಂತಿರಿ.
7ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ;ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
8ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು;ಯೆಹೋವನು ನುಡಿದಂತೆಯೇ ತಗ್ಗಿನ ಭೂಮಿಯು ಹಾಳಾಗುವುದು, ಮೇಲ್ನಾಡೂ ನಾಶವಾಗುವುದು.
9ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಬೇಕಲ್ಲಾ; ಅದರ ಪಟ್ಟಣಗಳು ಹಾಳುಬಿದ್ದು ನಿರ್ಜನವಾಗುವವು.
10ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ;ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ.
11ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ;ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.>>
12ಹೀಗಿರಲು ಯೆಹೋವನು ಇಂತೆನ್ನುತ್ತಾನೆ, <<ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು,ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು>> ಎಂಬುದೇ.
13ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.14<< <ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು> ಎಂದು ನೀವು ಅಂದುಕೊಳ್ಳುವುದು ಹೇಗೆ? 15ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ.ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.
16ಮೋವಾಬಿಗೆ ದುರ್ಗತಿ ಸಮೀಪಿಸಿದೆ, ವಿಪತ್ತು ಬೇಗ ಬರುವುದು.
17ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ.<ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ> ಎಂದು ಪ್ರಲಾಪಿಸಿರಿ.
18ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ!ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.
19ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ;ಓಡಿಹೋಗುವವನನ್ನೂ ಮತ್ತು ತಪ್ಪಿಸಿಕೊಳ್ಳುವವಳನ್ನೂ <ಏನಾಯಿತು?> ಎಂದು ವಿಚಾರಿಸಿರಿ.
20ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ದುಃಖದಿಂದ ಕೂಗಿರಿ;ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.
21ಮೇಲ್ನಾಡಿಗೆ ದಂಡನೆಯಾಗಿದೆ; ಹೋಲೋನ್, ಯಾಚಾ, ಮೆಫಾತ್,
22ದೀಬೋನ್, ನೆಬೋ ಮತ್ತು ಬೇತ್ ದಿಬ್ಲಾತಯಿಮ್,
23ಕಿರ್ಯಾತಯಿಮ್, ಬೇತ್ ಗಾಮೂಲ್ ಮತ್ತು ಬೇತ್ ಮೆಯೋನ್,
24ಕೆರೀಯೋತ್, ಬೊಚ್ರ ಅಂತು ದೂರದ ಮತ್ತು ಹತ್ತಿರದ ಮೋವಾಬಿನ ಎಲ್ಲಾ ಪಟ್ಟಣಗಳಿಗೂ ದಂಡನೆಯಾಗದೆ ಇರುವುದಿಲ್ಲ.
25ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ>> ಎಂಬುದೇ. 26<<ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.27ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ?28ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;
29ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ, ಅವರ ಡಂಭ, ಅಹಂಕಾರ, ಸ್ವಾಭಿಮಾನ ಮತ್ತು ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.>> 30ಯೆಹೋವನು ಹೇಳುವುದೇನೆಂದರೆ, <<ಅವರ ಗರ್ವೋದ್ರೇಕವು ನನಗೆ ಗೊತ್ತು, ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವುದೆಲ್ಲಾ ನಿರರ್ಥಕ.31ಆದಕಾರಣ ನಾನು ಮೋವಾಬಿನ ನಿಮಿತ್ತ ಗೋಳಾಡುವೆನು;ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವುದು.
32ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು;ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ;
ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.
33ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ;ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.
34ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ,ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.
35ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲಮಾಡುವೆನು. ಇದು ಯೆಹೋವನ ನುಡಿ.>> 36ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ;ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.
37ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು. 38ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ;<<ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ>> ಎಂದು ಯೆಹೋವನು ಅನ್ನುತ್ತಾನೆ.
39ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ ಮತ್ತು ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ. 40ಯೆಹೋವನು ಇಂತೆನ್ನುತ್ತಾನೆ, <<ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.41ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು. 42ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.>>
43ಯೆಹೋವನು ಇಂತೆನ್ನುತ್ತಾನೆ, <<ಮೋವಾಬಿನ ನಿವಾಸಿಯೇ, ಭಯವೂ, ಗುಂಡಿಯೂ, ಬಲೆಯೂ ನಿನಗೆ ಕಾದಿವೆ;
44ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು;ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.>>
45ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ;ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಹಣೆಯನ್ನೂ, ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ.
46<<ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ? ಕೆಮೋಷಿನ ಭಕ್ತರು ನಾಶವಾದರು;ನಿನ್ನ ಗಂಡು, ಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು.
47ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ>>.ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.
49ಅಮ್ಮೋನಿನ ವಿಷಯವಾದ ದೈವೋಕ್ತಿ
1ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ,<<ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ?
ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ?
ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?
2ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು,ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು;
ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು;
ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.>>
3<<ಹೆಷ್ಬೋನಿನವರೇ, ಗೋಳಾಡಿರಿ; <ಆಯಿ> ಎಂಬ ಊರು ಹಾಳಾಯಿತು,ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ;
ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
4<ನನ್ನ ಮೇಲೆ ಯಾರು ತಾನೆ ಬಿದ್ದಾರು?> ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ,<ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು> ಏಕೆ ಕೊಚ್ಚಿಕೊಳ್ಳುತ್ತೀ?
5ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ,ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು,
ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.
6ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.>>ಎದೋಮಿನ ವಿಷಯವಾದ ದೈವೋಕ್ತಿ
7ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,<<ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ?
ಅವರ ಜ್ಞಾನವು ಮಾಯವಾಯಿತೋ?
8ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ;ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.
9ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ;ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.
10ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು;ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.
11ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ. 12ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ,ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.
13ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ.ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.>>
14ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ,<<ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.
15ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ. 16ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ,ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ;
ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ,
ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.>>
17ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು;ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
18ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.
19ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು;
ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು;
ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು?
ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
20ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ,ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು;
ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
21ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!
22ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು;ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
ದಮಸ್ಕದ ವಿಷಯವಾದ ದೈವೋಕ್ತಿ
23ದಮಸ್ಕವನ್ನು ಕುರಿತದ್ದು,<<ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.
24ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
25ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ! 26ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
27ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು,ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು>> ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.
ಕೇದಾರಿನ ವಿಷಯವಾದ ದೈವೋಕ್ತಿ
28ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು.<<ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ>> ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
29<<ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು.ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, <ಸುತ್ತಮುತ್ತಲು ದಿಗಿಲು> ಎಂಬುದಾಗಿ ಅವರ ಕಡೆಗೆ ಕೂಗುವರು.>>
30ಯೆಹೋವನು ಇಂತೆನ್ನುತ್ತಾನೆ, <<ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ,ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು
ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
31ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ! 32ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು;ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
33ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು;ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.>>
ಏಲಾಮಿನ ವಿಷಯವಾದ ದೈವೋಕ್ತಿ
34ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.
35<<ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.
36ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ,ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.
37ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು;ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;
38ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು.
39ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.>>
50ಬಾಬೆಲಿನ ವಿಷಯವಾದ ದೈವೋಕ್ತಿ
1ಯೆಹೋವನು ಪ್ರವಾದಿಯಾದ ಯೆರೆಮೀಯನ ಮೂಲಕ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ಪ್ರಕಟಿಸಿದ ವಾಕ್ಯ.
2<<ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ,<ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ,
ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.
3ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು,ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.
4ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.
5ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ,ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ> ಎಂದು ಹೇಳುವರು.
6ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ;ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.
7ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, <ನಾವು ಅವರನ್ನು ನುಂಗಿದ್ದು ದೋಷವಲ್ಲ,ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ> ಅಂದುಕೊಂಡರು.
8ಬಾಬೆಲ್ ದೇಶದೊಳಗಿಂದ ಓಡಿಹೋಗಿರಿ, ಕಸ್ದೀಯರ ಸೀಮೆಯಿಂದ ಹೊರಡಿರಿ; ಹಿಂಡುಗಳ ಮುಂದೆ ಹೋಗುವ ಹೋತಗಳಂತಿರಿ.
9ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು;ಅವು ಬಾಬೆಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು;
ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.
10ಕಸ್ದೀಯ ರಾಜ್ಯವು ಸೂರೆಯಾಗುವುದು; ಸೂರೆಗಾರರೆಲ್ಲರೂ ತೃಪ್ತಿಗೊಳ್ಳವರು, ಇದು ಯೆಹೋವನ ನುಡಿ>> ಎಂಬುದೇ.ಬಾಬೆಲಿನ ಪತನ
11<<ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ,ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ
12ನಿಮ್ಮ ಮಾತೃಭೂಮಿಯು ಮಾನಭಂಗಕ್ಕೆ ಈಡಾಗುವುದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವುದು;ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವುದು.
13ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು;ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.
14ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬೆಲೋನಿಗೆ ಮುತ್ತಿಗೆ ಹಾಕಿರಿ,ಬಾಣಗಳನ್ನು ಉಳಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪ ಮಾಡಿತಲ್ಲಾ.
15ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು.ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.
16ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ;ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
ಇಸ್ರಾಯೇಲರು ಹಿಂದಿರುಗುವರು
17ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ;ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು,
ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.
18ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,ಆಹಾ, ನಾನು ಅಶ್ಶೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಮತ್ತು ಅವನ ದೇಶವನ್ನೂ ದಂಡಿಸುವೆನು.
19ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು;ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವುದು.
20ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ;ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ;
ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.>>
ಬಾಬೆಲೋನಿಗೆ ದೇವರ ದಂಡನೆ
21ಯೆಹೋವನು ಇಂತೆನ್ನುತ್ತಾನೆ, <<ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ,ಅವರನ್ನು ಸಂಹರಿಸಿ, ಅನಂತರ ದೇಶವನ್ನು ತೀರಾ ಹಾಳುಮಾಡಿ, ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.
22ಯುದ್ಧದ ಆರ್ಭಟವೂ ಮಹಾನಾಶನದ ಶಬ್ದವೂ ದೇಶದೊಳಗೆ ಕೇಳಿಸುತ್ತವೆ. 23ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು!ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!
24ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ;ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.
25ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು;ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.
26ಲೋಕದ ಕಟ್ಟಕಡೆಯಿಂದ ಬಾಬೆಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ;ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.
27ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ!ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
28ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ!ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು
ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ.
29ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬೆಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ;ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ;
ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.
30ಆದಕಾರಣ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು,ಯುದ್ಧವೀರರೆಲ್ಲಾ ಸುಮ್ಮನಾಗುವರು; ಇದು ಯೆಹೋವನ ನುಡಿ>> ಎಂಬುದೇ.
31ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, <<ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ;ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.
32ಸೊಕ್ಕಿನ ರಾಜ್ಯವು ಎಡವಿ ಬೀಳುವುದು, ಅದನ್ನು ಯಾರೂ ಎತ್ತರು;ಅದರ ಪಟ್ಟಣಗಳಿಗೆ ಬೆಂಕಿಹೊತ್ತಿಸುವೆನು, ಅದು ಸುತ್ತಲಿರುವುದನ್ನು ನುಂಗಿಬಿಡುವುದು.>>
33ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,<<ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ;
ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.
34ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ;ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.>>
35ಯೆಹೋವನು ಇಂತೆನ್ನುತ್ತಾನೆ, <<ಖಡ್ಗವು ಕಸ್ದೀಯರ ಮೇಲೆ ಬೀಳಲಿ!ಬಾಬೆಲಿನ ಸಾಮಾನ್ಯ ಜನರು, ಪ್ರಧಾನರು, ಪಂಡಿತರು, ಇವರನ್ನೆಲ್ಲಾ ಹತಿಸಲಿ!
36ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು.ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅವರು ಬೆಚ್ಚಿಬೀಳುವರು.
37ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ!ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.
38ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು.ಅದು ಬೊಂಬೆಗಳಿಂದ ತುಂಬಿದ ದೇಶ,
ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;
39ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು;ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ.
40ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ,ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.
41ಆಹಾ, ಉತ್ತರ ದಿಕ್ಕಿನಿಂದ ಒಂದು ಜನಾಂಗವು ಬರುತ್ತೆ, ಮಹಾ ಜನವೂ, ಬಹು ಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.
42ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು;ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ;
ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ>> ಎಂದು ಯೆಹೋವನು ಅನ್ನುತ್ತಾನೆ.
43ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು,ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.
44ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು;ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು;
ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು?
ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲನು?
45ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ,ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ,
ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು;
ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.
46ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ,ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.
511ಯೆಹೋವನು ಇಂತೆನ್ನುತ್ತಾನೆ, <<ಇಗೋ, ನಾನು ಬಾಬೆಲಿನ ಮೇಲೂ, ಲೇಬ್ ಕಾಮೈ ದೇಶದವರ ಮೇಲೂ ನಾಶನದ ಗಾಳಿಯನ್ನು ಬೀಸಮಾಡುವೆನು.
2ಅನ್ಯಜನರನ್ನು ಬಾಬೆಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು.ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯಮಿತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.
3ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ.ಬಾಬೆಲಿನ ಯುವಕರನ್ನು ಉಳಿಸದಿರಿ; ಅದರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ.
4ಕಸ್ದೀಯರು ತಮ್ಮ ದೇಶದಲ್ಲಿ ಹತರಾಗಿ ಬೀಳುವರು, ಬಾಬೆಲಿನ ಬೀದಿಗಳಲ್ಲಿ ಇರಿಯಲ್ಪಟ್ಟು ಮಣ್ಣುಪಾಲಾಗುವರು. 5ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ,ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.
6ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ.ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬೆಲೋನಿಗೆ ಪ್ರತಿಕಾರ ಮಾಡುವನು.
7ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು;ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.
8ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ;ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.
9ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ;ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ;
ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.
10ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ;ನಮ್ಮ ದೇವರಾದ ಯೆಹೋವನು ನಡೆಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!
11ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ,ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ.
ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ;
ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ !
12ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ,ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ;
ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ.
13ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ,ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.
14ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು,<ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು.
ಯೆಹೋವನಿಗೆ ಸ್ತುತಿಗೀತೆ
15ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿತನ್ನ ವಿವೇಕದಿಂದ ಆಕಾಶಮಂಡಲವನ್ನು ವಿಸ್ತರಿಸಿದ್ದಾನೆ.
16ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ;ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ;
ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
17ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ;ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು;
ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
18ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ;ದಂಡನೆಯಾಗುವಾಗ ಅಳಿದುಹೋಗುವವು.
19ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು;ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ಹೆಸರು.
20ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು,ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;
21ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ;ನಿನ್ನಿಂದ ರಥವನ್ನೂ, ಸಾರಥಿಯನ್ನೂ ನಾಶಮಾಡುತ್ತೇನೆ;
22ನಿನ್ನಿಂದ ಸ್ತ್ರೀಪುರುಷರನ್ನು ನಾಶಮಾಡುತ್ತೇನೆ; ನಿನ್ನಿಂದ ಬಾಲಕರನ್ನು ಮತ್ತು ವೃದ್ಧರನ್ನು ನಾಶ ಮಾಡುತ್ತೇನೆ;ನಿನ್ನಿಂದ ಯುವತೀ ಮತ್ತು ಯುವಕರನ್ನು ನಾಶಮಾಡುವೆನು;
23ನಿನ್ನಿಂದ ಕುರುಬನನ್ನೂ ಹಾಗು ಹಿಂಡನ್ನೂ ನಾಶಮಾಡುತ್ತೇನೆ;ನಿನ್ನಿಂದ ರೈತನನ್ನೂ ಹಾಗೂ ನೊಗದ ಎತ್ತುಗಳನ್ನೂ ನಾಶಮಾಡುವೆನು;
ನಿನ್ನಿಂದ ದೇಶಾಧಿಪತಿಗಳನ್ನೂ ಮತ್ತು ನಾಡ ಒಡೆಯರನ್ನೂ ನಾಶಮಾಡುವೆನು;
24ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ,ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬೆಲೋನಿಗೆ ಮುಯ್ಯಿತೀರಿಸುವೆನು> >> ಎಂದು ಯೆಹೋವನು ಅನ್ನುತ್ತಾನೆ.
25ಯೆಹೋವನು ಇಂತೆನ್ನುತ್ತಾನೆ, <<ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ;ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.
26ಮೂಲೆಗಲ್ಲಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು,ನೀನು ನಿತ್ಯನಾಶಕ್ಕೆ ಗುರಿಯಾಗುವಿ, ಇದು ಯೆಹೋವನ ನುಡಿ>> ಎಂಬುದೇ.
27<<ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ,ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ,
ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.
28ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು,ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ.
29ದೇಶವೆಲ್ಲಾ ನೊಂದು ನಡುಗುತ್ತದೆ;ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.
30ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ;ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.
31ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ,ಅರಸನ ಬಳಿ ಬಂದು, <ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ,
32ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ> ಎಂದು ತಿಳಿಸುವರು.>> 33ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,<<ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ;
ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.
34ಯೆಹೂದವು ಹೀಗೆ ಪ್ರಲಾಪಿಸುತ್ತದೆ, <ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ,ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ,
ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.
35ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬೆಲೋನಿಗೆ ತಟ್ಟಲಿ> ಎಂದು ಚೀಯೋನಿನವರು ಅನ್ನುತ್ತಾರೆ;<ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ> ಎಂದು ಯೆರೂಸಲೇಮಿನವರು ಹೇಳುತ್ತಾರೆ.>>
ಬಾಬೆಲೋನಿಗೆ ಪ್ರತಿಕಾರ
36ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, <<ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು;ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.
37ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು;ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.
38ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ.
39ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು,ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ
ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ>> ಎಂಬುದೇ.
40<<ನಾನು ಅವರನ್ನು ಕುರಿ, ಟಗರು ಮತ್ತು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು. 41ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ, ಬಾಬೆಲ್ ಜನಾಂಗಗಳ ಬೆರಗಿಗೆ ಈಡಾಗಿದೆ!
42ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ. 43ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ.ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.
44ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ,ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು;
ಪ್ರವಾಹಪ್ರವಾಹವಾಗಿ ಬಾಬೆಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ;
ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.
ಸೆರೆವಾಸಿಗಳಿಗೆ ಸಂದೇಶ
45ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ.
46ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ;ಒಂದು ವರ್ಷ ಒಂದು ಸುದ್ದಿಯು, ಮತ್ತೊಂದು ವರ್ಷ ಮತ್ತೊಂದು ಸುದ್ದಿಯು ಹರಡುತ್ತಿರುವವು;
ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವುದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು.
47ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ.ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.
48ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು;ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.>>
49<<ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ,ಹಾಗೆಯೇ ಬಾಬೆಲೂ ಹತವಾಗುವುದು.
50ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ;ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇಮಿನ ಹಂಬಲ ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.
51ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು,<ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ
ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ> ಎಂಬುದಾಗಿ ಅಂದುಕೊಳ್ಳುತ್ತಿರೋ?
52ಹೀಗಿರಲು ಯೆಹೋವನು ಇಂತೆನ್ನುತ್ತಾನೆ, <ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ;ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.
53ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ,ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.> ಇದು ಯೆಹೋವನ ನುಡಿ.>>
ಬಾಬೆಲಿನ ಸಂಪೂರ್ಣ ವಿನಾಶ
54<<ಆಹಾ, ಬಾಬೆಲಿನಿಂದ ಮೊರೆಯೂ, ಕಸ್ದೀಯರ ದೇಶದಿಂದ ಮಹಾನಾಶದ ಶಬ್ದವೂ ಕೇಳಿ ಬರುತ್ತದೆ!
55ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತಾನೆ;ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ;
56ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ,ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು,
ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ.
57ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು,ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು;
ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು
ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.>>
58ಸೇನಾಧೀಶ್ವರನಾದ ಯೆಹೋವನು,<<ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು.
ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ,
ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು>> ಎಂದು ನುಡಿಯುತ್ತಾನೆ.
ಯೆರೆಮೀಯನ ಸಂದೇಶವನ್ನು ಬಾಬೆಲೋನಿಗೆ ಕಳುಹಿಸಿದ್ದು
59ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯನಾಲ್ಕನೆಯ ವರ್ಷ ಚಿದ್ಕೀಯನೊಡನೆ ಬಾಬೆಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರೆಂದರೆ ಸೇನೆಯ ಪ್ರಧಾನ ಅಧಿಕಾರಿ.)
60ಯೆರೆಮೀಯನು ಬಾಬೆಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು.61ಅವನು ಸೆರಾಯನಿಗೆ ಹೀಗೆ ಹೇಳಿದನು, <<ನೋಡು, ನೀನು ಬಾಬೆಲೋನಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ ಓದಿ ಹೇಳಿ,62<ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ> ಎಂಬುದಾಗಿ ಅರಿಕೆಮಾಡಬೇಕು.63ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ, ಯೂಫ್ರೆಟಿಸ್ ನದಿಯ ಮಧ್ಯದೊಳಗೆ ಹಾಕಿ,64ಯೆಹೋವನು ಬಾಬೆಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು>> ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು.
52ಯೆರೂಸಲೇಮಿನ ಪತನ
1ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.2ಇವನು ಯೆಹೋಯಾಕೀಮನಂತೆ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.3ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.4ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,5ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.6ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,7ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.8ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.9ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.10ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.11ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬೆಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.12ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.13ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.14ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.15ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.16ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.17ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು,18ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬೆಲೋನಿಗೆ ತೆಗೆದುಕೊಂಡು ಹೋದರು.19ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.20ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.21ಕಂಬಗಳು ಎಂಥವುಗಳೆಂದರೆ ಮೊದಲನೆಯ ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಅದರ ಸುತ್ತಳತೆಯು ಹನ್ನೆರಡು ಮೊಳ; ಅದು ನಾಲ್ಕು ಬೆರಳಷ್ಟು ದಪ್ಪವಾಗಿಯೂ, ಪೊಳ್ಳಾಗಿಯೂ ಇತ್ತು.22ಕಂಬದ ಮೇಲೆ ಐದು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು; ಕುಂಭದ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ಅಲಂಕಾರವಾಗಿ ಹಾಗೆಯೇ ಇತ್ತು.23ನಾಲ್ಕು ಪಕ್ಕಗಳಲ್ಲಿ ತೊಂಭತ್ತಾರು ದಾಳಿಂಬ ಹಣ್ಣುಗಳಿದ್ದವು; ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬ ಹಣ್ಣುಗಳಿದ್ದವು.24ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,25ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ರೈತರು ಇದ್ದರು.26ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು.27ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.28ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.29ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಎಂಟುನೂರ ಮೂವತ್ತೆರಡು ಜನರನ್ನು ಯೆರೂಸಲೇಮಿನಿಂದ ಸೆರೆಯೊಯ್ದನು.30ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.ಯೆಹೋಯಾಖೀನನ ಬಿಡುಗಡೆ
31ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಬಾಬೆಲಿನ ಅರಸನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.32ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತ ಸ್ಥಾನವನ್ನು ಕೊಟ್ಟನು.33ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.34ಅವನು ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು.
ಯೆಹೆಜ್ಕೇಲನು
1ವಾಹನರೂಢನಾದ ಯೆಹೋವನ ದರ್ಶನ
1ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.2ಅರಸನಾದ ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ,3ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.4ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು.5ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು; ಅವುಗಳ ರೂಪವು ಮನುಷ್ಯನ ರೂಪದಂತಿತ್ತು.6ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ಮತ್ತು ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು.7ಅವುಗಳ ಕಾಲುಗಳು ನೆಟ್ಟಗಿದ್ದು; ಹೆಜ್ಜೆಗಳು ಕರುವಿನ ಗೊರಸಿನಂತಿದ್ದವು. ಅವುಗಳು ಬೆಳಗಿದ ತಾಮ್ರದ ಹಾಗೆ ಹೊಳೆಯುತ್ತಿದ್ದವು.8ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ಹಸ್ತದಂಥ ಹಸ್ತಗಳಿದ್ದವು; ಆ ನಾಲ್ಕು ಜೀವಿಗಳ ಮುಖಗಳೂ, ರೆಕ್ಕೆಗಳೂ ಹೇಗಿದ್ದವೆಂದರೆ,9ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಮುಂದೆ ಹೋಗುವಾಗ ತಿರುಗಿಕೊಳ್ಳದೆ ನೇರ ಮುಖವಾಗಿಯೇ ಹೋಗುತ್ತಿದ್ದವು.10ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು.11ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟಿದ್ದವು; ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.12ಆ ಜೀವಿಗಳೆಲ್ಲಾ ನೇರ ಮುಖವಾಗಿಯೇ ಹೋಗುತ್ತಿದ್ದವು, ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಹಿಂತಿರುಗಿನೋಡದೆ ಮುಂದೆ ಹೋದವು.13ಆ ಜೀವಿಗಳ ಮಧ್ಯದಲ್ಲಿ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.14ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ, ಹಿಂದಕ್ಕೂ ವೇಗವಾಗಿ ಚಲಿಸುತ್ತಿದ್ದವು.15ಇಗೋ, ನಾನು ಆ ಜೀವಿಗಳನ್ನು ನೋಡುತ್ತಿರಲಾಗಿ ಒಂದೊಂದು ಕಡೆಯಲ್ಲಿಯೂ ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ಕಾಣಿಸಿತು.16ಆ ಚಕ್ರಗಳ ವರ್ಣವೂ, ರಚನೆಯೂ ಹೇಗಿದ್ದವೆಂದರೆ, ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.17ಅವು ಚಲಿಸುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ತಿರುಗುತ್ತಿದ್ದವು; ಓರೆಯಾಗಿ ತಿರುಗುತ್ತಿರಲಿಲ್ಲ.18ಗಾಲಿಗಳ ಸುತ್ತಣ ಭಾಗಗಳು ಎತ್ತರವಾಗಿಯೂ, ಭಯಂಕರವಾಗಿಯೂ ಇದ್ದವು; ಈ ಭಾಗಗಳ ಎಲ್ಲಾ ಕಡೆಯಲ್ಲಿಯೂ ತುಂಬಾ ಕಣ್ಣುಗಳಿದ್ದವು;19ಜೀವಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದೆ ಹೋಗುತ್ತಿದ್ದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೇಳುವಾಗ ಚಕ್ರಗಳೂ ಮೇಲೆ ಏಳುತ್ತಿದ್ದವು;20ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳ ಒಳಗಿನ ಆತ್ಮವು ಚಕ್ರಗಳಲ್ಲಿ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು.21ಅವು ಮುಂದೆ ಹೋಗುವಾಗ ಇವೂ ಮುಂದೆ ಹೋಗುತ್ತಿದ್ದವು, ಅವು ನಿಂತು ಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇತ್ತು.22ಭೀಕರವಾದ ಮಂಜುಗಡ್ಡೆಯಂತೆ ಥಳಥಳಿಸುವ ಒಂದು ರೀತಿಯ ಗಗನಮಂಡಲ ಆ ಜೀವಿಗಳ ತಲೆಯ ಮೇಲ್ಗಡೆ ಹರಡಿತ್ತು.23ಅದರ ಕೆಳಗೆ ಜೀವಿಗಳ ರೆಕ್ಕೆಗಳು ನೇರವಾಗಿ ಚಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು.24ಅವು ಮುಂದೆ ಹೋಗುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.25ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲದ ಮೇಲಿಂದ ಒಂದು ಧ್ವನಿಯು ಕಿವಿಗೆ ಬಿತ್ತು. ಜೀವಿಗಳು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.26ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.27ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು.28ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.
2ಯೆಹೆಜ್ಕೇಲನ ಕರೆ
1ಯೆಹೋವನು ನನಗೆ, <<ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತನಾಡುವೆನು>> ಎಂದು ಹೇಳಿದನು.2ಆತನು ಈ ಮಾತನ್ನು ಹೇಳುವಾಗ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತನಾಡಿದಾತನ ನುಡಿಯನ್ನು ಕೇಳಿದೆನು.3ಆತನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ನನ್ನ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ; ಈ ದಿನದವರೆಗೆ ಅವರೂ, ಅವರ ಪೂರ್ವಿಕರೂ ನನ್ನ ವಿರುದ್ಧವಾಗಿ ಪಾಪಮಾಡುತ್ತಲೇ ಇದ್ದಾರೆ.4<<ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, <ಕರ್ತನಾದ ಯೆಹೋವನು ಇಂತೆನ್ನುತ್ತಾನೆ> ಎಂದು ನುಡಿ.5ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು".6<<ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.7ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.>>ಪ್ರವಾದಿಗೆ ಲಭಿಸಿದ ವರ
8ಇದಲ್ಲದೆ ಆತನು, <<ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿದೆರೆದು ತಿಂದುಬಿಡು>> ಅಂದನು.9ಇಗೋ, ನಾನು ನೋಡುತ್ತಿರಲಾಗಿ ಒಂದು ಕೈ ನನ್ನ ಕಡೆಗೆ ಚಾಚಿತ್ತು, ಇಗೋ ಅದರಲ್ಲಿ ಗ್ರಂಥದ ಸುರುಳಿಯು ಕಾಣಿಸಿತು.10ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಪ್ರಲಾಪ, ಗೋಳಾಟ, ಶೋಕ ಇವುಗಳೇ.
31ಆತನು ನನಗೆ, <<ನರಪುತ್ರನೇ, ನಿನಗೆ ಸಿಕ್ಕಿದ ಈ ಸುರುಳಿಯನ್ನು ತಿನ್ನು; ಅನಂತರ ನೀನು ಹೋಗಿ (ಇದರಲ್ಲಿನ ಸಂಗತಿಗಳನ್ನು) ಇಸ್ರಾಯೇಲ್ ವಂಶದವರಿಗೆ ಸಾರು>> ಎಂದು ಅಪ್ಪಣೆಕೊಟ್ಟನು.2ನಾನು ಬಾಯಿ ತೆರೆದೆ, ಆತನು ಆ ಸುರುಳಿಯನ್ನು ನನಗೆ ತಿನ್ನಿಸಿದನು.3ಆಗ ಆತನು ನನಗೆ, <<ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ>> ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಿಯಲ್ಲಿ ಜೇನಿನಂತೆ ಸಿಹಿಯಾಗಿತ್ತು.ಪ್ರವಾದಿಗೆ ಅವಶ್ಯಕವಾದ ಧೈರ್ಯ
4ಆಮೇಲೆ ಆತನು ನನಗೆ ಹೀಗೆಂದನು, <<ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.5ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಬಳಿಗೆ ಕಳುಹಿಸುತ್ತೇನೆಯೇ ಹೊರತು ಕಷ್ಟಕರವಾದ ಅನ್ಯಭಾಷೆಯ ಜನರ ಬಳಿಗೆ ಕಳುಹಿಸುವುದಿಲ್ಲ.6ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಒಳಗೆ ನಿನ್ನನು ಕಳುಹಿಸುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.7ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರೂ ನಾಚಿಕೆಗೆಟ್ಟವರೂ, ಹಟಮಾರಿಗಳು ಆಗಿದ್ದಾರೆ.8ಇಗೋ, ನಾನು ಅವರ ಕಠಿಣ ಹೃದಯಕ್ಕೆ ವಿರುದ್ಧವಾಗಿ ನಿನ್ನ ಹೃದಯವನ್ನು ಕಠಿಣಪಡಿಸಿದ್ದೇನೆ; ಅವರ ಹಣೆಗೆ ಪ್ರತಿಯಾಗಿ ನಿನ್ನ ಹಣೆಯನ್ನು ಗಟ್ಟಿಮಾಡಿದ್ದೇನೆ.9ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಗಟ್ಟಿಯಾದ ವಜ್ರದಂತೆ ಮಾಡಿದ್ದೇನೆ; ಅವರು ತಿರುಗಿ ಬೀಳುವ ಮನೆತನದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಹೆದರದಿರು.>>10ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ನಾನು ನಿನಗೆ ಹೇಳುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ.11ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, <ಕರ್ತನಾದ ಯೆಹೋವನು ಇಂತೆನ್ನುತ್ತಾನೆ> ಎಂದು ಅವರಿಗೆ ಸಾರು.>>ಪ್ರವಾದಿಯು ತನ್ನ ಉದ್ಯೋಗ ಸ್ಥಳವನ್ನು ತಲುಪಿದ್ದು
12ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, <<ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ>> ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.13ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿಯುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು, ಹೀಗೆ ಭೂಕಂಪದಂಥ ಮಹಾಶಬ್ದವು ನನ್ನ ಕಿವಿಗೆ ಬಿತ್ತು.14ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.15ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಉಳಿದುಬಿಟ್ಟೆನು.ಕಾವಲುಗಾರನಾಗಿ ನೇಮಕ
16ಏಳು ದಿನಗಳಾದ ಮೇಲೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,17<<ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.18ನಾನು ದುಷ್ಟನಿಗೆ, <ನೀನು ಖಂಡಿತವಾಗಿ ಸಾಯುವೆ> ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.19ನೀನು ದುಷ್ಟನನ್ನು ಎಚ್ಚರಿಸಿದರೂ, ಅವನು ತನ್ನ ದುಷ್ಟತನವನ್ನೂ, ಕೆಟ್ಟಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.20ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ.21ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.>>ಪ್ರವಾದಿಯ ಬಾಯಿಗೆ ಬೀಗ
22ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ, <<ನೀನು ಎದ್ದು, ಬಯಲು ಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು>> ಎಂದು ಹೇಳಿದನು.23ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು.24ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿದ ಮೇಲೆ ಆತನು ನನಗೆ ಹೀಗೆ ಹೇಳಿದನು, <<ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.25ನರಪುತ್ರನೇ, ಇಗೋ, ನಿನ್ನ ಸ್ವಜನರು ನಿನ್ನನ್ನು ಬಂಧಿಸಿ ಕಟ್ಟುವರು, ನೀನು ಹೊರಗೆ ಸಂಚರಿಸಲು ಆಗುವುದಿಲ್ಲ.26ಇದಲ್ಲದೆ ನಿನ್ನ ನಾಲಿಗೆಯು ಸೇದಿ ಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸಲಾರೆ; ಅವರು ತಿರುಗಿ ಬೀಳುವ ಮನೆತನದವರಾಗಿದ್ದಾರೆ.27ನಾನು ನಿನ್ನೊಡನೆ ಮತ್ತೆ ಮಾತನಾಡುವಾಗ ನಾನು ನಿನ್ನ ಬಾಯಿಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, <ಕರ್ತನಾದ ಯೆಹೋವನು ಇಂತೆನ್ನುತ್ತಾನೆ> ಎಂದು ಹೇಳಬೇಕು; ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ; ಅವರು ತಿರುಗಿ ಬೀಳುವ ವಂಶದವರೇ.>>
4ಯೆರೂಸಲೇಮಿನ ನಾಶನದ ಸೂಚನೆಗಳು
1<<ನರಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ಪಟ್ಟಣದ ನಕ್ಷೆಯನ್ನು ಬರೆ.2ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಅಡ್ಡಕಟ್ಟಿ, ಪಾಳೆಯಗಳನ್ನು ಮಾಡಿ, ಕತ್ತರಿಸುವ ಯಂತ್ರಗಳನ್ನು ನಿಲ್ಲಿಸಿ, ಅದಕ್ಕೆ ಮುತ್ತಿಗೆ ಹಾಕು.3ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಮತ್ತು ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಿಗೆ ಹಾಕಲ್ಪಡುವುದು, ನೀನು ಅದನ್ನು ಮುತ್ತಿಗೆ ಹಾಕಿದಂತಾಗುವುದು. ಇದು ಇಸ್ರಾಯೇಲ್ ವಂಶದವರಿಗೆ ಒಂದು ಗುರುತು.ಮುತ್ತಿಗೆಯನ್ನೂ ಸೆರೆಯನ್ನೂ ಅನುಭವಿಸಬೇಕಾದ ಕಾಲಸೂಚನೆ
4<<ಇದಲ್ಲದೆ, ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೋ. ಇಸ್ರಾಯೇಲ್ ವಂಶದವರ ಪಾಪದ ಭಾರವನ್ನು ಅದರ ಮೇಲಿಡಬೇಕು. ನೀನು ಎಡಮಗ್ಗುಲಲ್ಲಿ ಮಲಗುವ ದಿನಗಳ ಪ್ರಕಾರ ಅವರ ಪಾಪದ ಭಾರವನ್ನು ಹೊತ್ತುಕೊಂಡಿರಬೇಕು.5ನಾನು ದಿನಗಳ ಲೆಕ್ಕದ ಪ್ರಕಾರ ಅವರ ಪಾಪದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಬತ್ತು ದಿನಗಳಾಗಿವೆ. ಹೀಗೆ ನೀನು ಇಸ್ರಾಯೇಲ್ ವಂಶದವರ ಪಾಪವನ್ನು ನೀನು ಹೊರಬೇಕು.6<<ಅಷ್ಟು ದಿನಗಳು ತೀರಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದ ವಂಶದವರ ಪಾಪವನ್ನು ಅನುಭವಿಸಬೇಕು; ವರ್ಷ ಒಂದಕ್ಕೆ ಒಂದು ದಿನದ ಮೇರೆಗೆ ನಲ್ವತ್ತು ದಿನ ಅವರ ಪಾಪವನ್ನು ಹೊರಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ.7ನಿನ್ನ ತೋಳಿಗೆ ಹೊದಿಕೆಯಿಲ್ಲದೆ, ಮುತ್ತಿಗೆಯಾದ ಯೆರೂಸಲೇಮಿನ ಕಡೆಗೆ ಮುಖವನ್ನು ತಿರುಗಿಸಿ, ಅದರ ವಿಷಯವಾಗಿ ಅಶುಭವನ್ನು ಪ್ರವಾದಿಸು.8ಇಗೋ, ನಿನ್ನ ಮುತ್ತಿಗೆಯ ದಿನಗಳು ತೀರುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.ಮುತ್ತಿಗೆಯಲ್ಲಿನ ಕೊರತೆ, ಸೆರೆಯಲ್ಲಿನ ಹೊಲೆ ಇವುಗಳ ಸೂಚನೆ
9<<ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದಿ, ನವಣೆ, ಕಡಲೆ, ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರತೊಂಬತ್ತು ದಿನ ಅದನ್ನು ತಿನ್ನು.10ನಿನ್ನ ಆಹಾರವನ್ನು ತೂಕದ ಪ್ರಕಾರ ದಿನವೊಂದಕ್ಕೆ ಇಪ್ಪತ್ತು ತೊಲಾದಂತೆ (230 ಗ್ರಾಂ) ತಿನ್ನು; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.11ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.12ನೀನು ಸೌದೆಗೆ ಬದಲಾಗಿ ಮನುಷ್ಯರ ಮಲವನ್ನು ಉರಿಸಿ, ನಿನ್ನ ಜನರ ಕಣ್ಣೆದುರಿಗೆ ಆ ಹಿಟ್ಟನ್ನು ರೊಟ್ಟಿಮಾಡಿ ಜವೆಗೋದಿಯ ರೊಟ್ಟಿಗಳಂತೆ ತಿನ್ನು.13ಹಾಗೆಯೇ ಇಸ್ರಾಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು>> ಇದು ಯೆಹೋವನ ನುಡಿ.14ಅದಕ್ಕೆ ನಾನು, <<ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ>> ಎಂದು ಅರಿಕೆಮಾಡಲು,15ಆತನು ನನಗೆ, <<ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ, ಇದನ್ನು ಉರಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೋ>> ಎಂದು ಉತ್ತರಕೊಟ್ಟನು.16ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಕಳವಳದಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ನಡುಗುತ್ತಾ ಕುಡಿಯುವರು.17ಅವರಲ್ಲಿ ಪ್ರತಿಯೊಬ್ಬರೂ ಅನ್ನ ಮತ್ತು ನೀರಿನ ಕೊರತೆಯಿಂದ ಕುಗ್ಗಿ ತಮ್ಮ ಅಧರ್ಮದಿಂದ ನಾಶವಾಗಿ ಹೋಗುವರು.>>
5ಯೆರೂಸಲೇಮಿನವರ ದುರ್ಗತಿಯ ಸೂಚನೆ
1<<ನರಪುತ್ರನೇ, ಹದವಾದ ಖಡ್ಗವನ್ನು ತೆಗೆದುಕೊಂಡು, ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ, ಗಡ್ಡವನ್ನೂ ಬೋಳಿಸಿಬಿಟ್ಟು, ತಕ್ಕಡಿಯನ್ನು ತಂದು ಅದರಿಂದ ತೂಗಿ ಆ ಕೂದಲನ್ನು ಭಾಗ ಮಾಡು.2ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು.3ಆಗ ಕಡೆಯ ಭಾಗದಲ್ಲಿ ಉಳಿಸಿಕೊಂಡ ಕೆಲವು ಕೂದಲನ್ನು ನಿನ್ನ ಮೇಲಂಗಿಯ ಅಂಚಿನಲ್ಲಿ ಕಟ್ಟು.4ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.>>ನಾಶನ ಸೂಚನೆಗಳ ವಿವರಣೆ
5ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇದು ಯೆರೂಸಲೇಮ್; ಪಟ್ಟಣವನ್ನು ನಾನು ಜನಾಂಗಗಳ ಮಧ್ಯದಲ್ಲಿ ಸ್ಥಾಪಿಸಿದ್ದೇನೆ, ಅದರ ಸುತ್ತಲು ನಾನಾ ದೇಶಗಳಿವೆ.6ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.>>7ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಕೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.8ಆದುದರಿಂದ ಯೆರೂಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು ಇದು ಕರ್ತನಾದ ಯೆಹೋವನ ನುಡಿ.9ನೀನು ಬಹಳ ಅಸಹ್ಯಕಾರ್ಯಗಳನ್ನು ನಡಿಸಿದ್ದರಿಂದ ನಾನು ಈವರೆಗೂ ಇನ್ನು ಮುಂದೆಯೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.10ಹೀಗಿರಲು, ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.>>11ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.12ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.13<<ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.14ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ, ಸುತ್ತಲಿನ ಜನಾಂಗಗಳ ನಿಂದೆಗೆ ಗುರಿ ಮಾಡುವೆನು.15<<ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.16ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.17ನಾನು ಕಳುಹಿಸುವ ಕ್ಷಾಮದಿಂದಲೂ, ದುಷ್ಟಮೃಗಗಳಿಂದಲೂ ನಿನಗೆ ಪುತ್ರಶೋಕವು ಉಂಟಾಗುವುದು; ವ್ಯಾಧಿಯೂ, ರಕ್ತ ಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು>> ಇದು ಯೆಹೋವನಾದ ನನ್ನ ನುಡಿ.
6ಇಸ್ರಾಯೇಲಿನ ಬೆಟ್ಟಗಳ ವಿರುದ್ಧ ಪ್ರವಾದನೆ
1ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು, ಅವುಗಳನ್ನು ಕುರಿತು ಪ್ರವಾದಿಸು.3<ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ, ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾನೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.4<< <ನಿಮ್ಮ ಯಜ್ಞವೇದಿಗಳು ಹಾಳಾಗುವವು, ನಿಮ್ಮ ಸೂರ್ಯಸ್ತಂಭಗಳು ಒಡೆಯಲ್ಪಡುವವು, ನಿಮ್ಮವರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.5ನಾನು ಇಸ್ರಾಯೇಲರ ಶವಗಳನ್ನು ಅವರ ವಿಗ್ರಹಗಳ ಮುಂದೆ ಬಿಸಾಡಿ ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಬಿಸಾಡಿಬಿಡುವೆನು.6<< <ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುದರಿಂದಲೂ, ಪೂಜಾ ಸ್ಥಳಗಳು ಪಾಳುಬೀಳುವುದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮ ಸೂರ್ಯಸ್ತಂಭಗಳು ಕಡಿಯಲ್ಪಡುವುವು.7ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.8<< <ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.9ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.10ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.> >>11ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, <ಆಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.12ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು, ತಪ್ಪಿಸಿಕೊಂಡು ಉಳಿದವನು ಕ್ಷಾಮದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.13ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.14ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.> >>
7ಇಸ್ರಾಯೇಲರ ನಾಶನ ಸಮೀಪಿಸಿತು
1ಇದಲ್ಲದೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ,<ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.>
3ಈಗಲೇ ನಿನಗೆ ಅಂತ್ಯವು ಬಂದಿದೆ;ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು.
4ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು;ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.>>
5ಕರ್ತನಾದ ಯೆಹೋವನು ಇಂತೆನ್ನುತ್ತಾನೆ,<<ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು!
6ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!
7ದೇಶ ನಿವಾಸಿಯೇ, ನಿನ್ನ ಗತಿ ಮುಗಿಯಿತು.ಸಮಯ ಬಂದಿತು, ದಿನ ಸಮೀಪಿಸಿತು;
ಬೆಟ್ಟಗಳ ಮೇಲೆ ಕೇಳಿಸುವ ಧ್ವನಿಯು ಉತ್ಸಾಹ ಧ್ವನಿಯಲ್ಲ, ಅದು ಕಳವಳವೇ.
8ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು,ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.
9ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು,ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.
10<<ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ,ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.
11ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ,ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ.
12ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ,ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
13ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು;ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ.
ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ.
14ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ;ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.
15ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು;ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.
16ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು,ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.
17ಎಲ್ಲರ ಕೈಗಳು ಜೋಲುಬಿದ್ದಿರುವುವು, ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.
18ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು;ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.
19ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು;ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ,
ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.
20ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು;ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು;
ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.
21ಅನ್ಯರ ಕೈಯಿಂದ ಕೊಳ್ಳೆಹೊಡೆಯಿಸಿ ಲೋಕದ ಅತಿ ದುಷ್ಟರಿಂದ ಸೂರೆಮಾಡಿಸುವೆನು;ಅವರು ಅದನ್ನು ಹೊಲೆಗೊಳಿಸುವೆನು.
22ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು;ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು.
23ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ,ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ.
24ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು;ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.
25ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ. 26ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು;<ದಿವ್ಯದರ್ಶನವಾಯಿತೇ?> ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು;
ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.
27ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು,ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ,
ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.>>
8ದೇವಾಲಯದಲ್ಲಿನ ಅಸಹ್ಯ ಕಾರ್ಯಗಳು
1ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.2ಇಗೋ, ನಾನು ನೋಡಲಾಗಿ ಬೆಂಕಿಯು ಉರಿಯುತ್ತದೋ ಎಂಬಂತೆ ನನಗೆ ತೇಜೋರೂಪವು ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತಕಾಂತಿಯು ಹೊಳೆಯಿತು.3ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.4ಆಹಾ, ಇಸ್ರಾಯೇಲಿನ ದೇವರ ಮಹಿಮೆಯ ದರ್ಶನವು ಬಯಲು ಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.5ಆಗ ಆತನು ನನಗೆ, <<ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು>> ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು.6ಆಗ ಆತನು ನನಗೆ, <<ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ>> ಎಂದು ಹೇಳಿದನು.7ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರ ಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು.8ಆಗ ಆತನು ನನಗೆ, <<ನರಪುತ್ರನೇ, ಗೋಡೆಯನ್ನು ತೋಡು>> ಎಂದು ಹೇಳಿದನು. ನಾನು ಗೋಡೆಯನ್ನು ತೋಡಲಾಗಿ ಅಲ್ಲಿ, ಒಂದು ಬಾಗಿಲು ಕಾಣಿಸಿತು.9ಆತನು ನನಗೆ, <<ನೀನು ಒಳಕ್ಕೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು>> ಎಂದು ಹೇಳಿದಾಗ ನಾನು ಹೋಗಿ ನೋಡಿದೆನು.10ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ ಮತ್ತು ಇಸ್ರಾಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿಸಲ್ಪಟ್ಟಿದ್ದವು.11ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.12ಆಗ ಆತನು ನನಗೆ, <<ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? <ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ> ಎಂದು ಮಾತನಾಡಿಕೊಳ್ಳುತ್ತಾರಷ್ಟೆ>> ಎಂಬುದಾಗಿ ಹೇಳಿದನು.13ಆಮೇಲೆ ಆತನು ನನಗೆ, <<ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವಿ>> ಎಂದು ಹೇಳಿದನು.14ಆತನು ನನ್ನನ್ನು ಯೆಹೋವನ ಆಲಯದ ಉತ್ತರದ ಬಾಗಿಲ ಮುಂದಕ್ಕೆ ಕರೆತಂದನು; ಇಗೋ, ಅಲ್ಲಿ ಸ್ತ್ರೀಯರು <<ತಮ್ಮೂಜ್ >> ದೇವತೆಗಾಗಿ ಅಳುತ್ತಾ ಕುಳಿತಿದ್ದರು.15ಇದಾದ ಮೇಲೆ ಆತನು ನನಗೆ, <<ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವೆ>> ಎಂದು ಹೇಳಿದನು.16ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.17ಆಗ ಆತನು ನನಗೆ, <<ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.18ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.>>
9ಯೆರೂಸಲೇಮಿಗೆ ಶಿಕ್ಷೆ
1ಆಮೇಲೆ ಆತನು, <<ಪಟ್ಟಣವನ್ನು ದಂಡಿಸತಕ್ಕವರೇ, ನೀವೆಲ್ಲರೂ ನಿಮ್ಮ ಹತ್ಯಾ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ>> ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.2ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರ ಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.3ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಕಂಡನು.4ಯೆಹೋವನು ಕೂಗಿ ಅವನಿಗೆ, <<ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು>> ಎಂದು ಅಪ್ಪಣೆಕೊಟ್ಟನು.5ಮತ್ತೂ ಆತನು ಉಳಿದವರಿಗೆ, <<ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ; ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ>> ಎಂಬುದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು.6ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.7ಆತನು ಅವರಿಗೆ, <<ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿರಿ>> ಎಂದು ಅಪ್ಪಣೆ ಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.8ಅವರು ಹತಿಸುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, <<ಅಯ್ಯೋ, ಕರ್ತನಾದ ಯೆಹೋವನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಹೊಯ್ದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ?>> ಎಂದು ಮೊರೆಯಿಟ್ಟೆನು.9ಆತನು ನನಗೆ, <<ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, <ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ> ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.10ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು>> ಎಂದು ಹೇಳಿದನು.11ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನು, <<ನಿನ್ನ ಅಪ್ಪಣೆಯಂತೆಯೇ ಮಾಡಿದ್ದೇನೆ>> ಎಂದು ಅರಿಕೆಮಾಡಿದನು.
10ಯೆಹೋವನ ಮಹಿಮೆ ದೇವಾಲಯವನ್ನು ಬಿಟ್ಟುಹೋದದ್ದು
1ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.2ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ, <<ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು>> ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.3ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು.4ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.5ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತನಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಅಂಗಳದವರೆಗೂ ಕೇಳಿಸಿತು.6ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಪುರುಷನಿಗೆ, <<ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೆಂಕಿಯನ್ನು ತೆಗೆದುಕೋ>> ಎಂದು ಅಪ್ಪಣೆ ಕೊಡಲು ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು.7ಆಗ ಒಬ್ಬ ಕೆರೂಬಿಯು ಇತರ ಕೆರೂಬಿಗಳ ನಡುವೆ ಕೈ ಚಾಚಿ ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು ನಾರಿನ ಬಟ್ಟೆಯನ್ನು ಹೊದ್ದುಕೊಂಡವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.8ಕೆರೂಬಿಗಳ ಒಂದೊಂದು ರೆಕ್ಕೆಯ ಕೆಳಗೂ ಮನುಷ್ಯಹಸ್ತದಂಥ ಒಂದೊಂದು ಹಸ್ತವು ಕಾಣಿಸಿತು.9ಇಗೋ, ನಾನು ನೋಡಲಾಗಿ ಆ ಕೆರೂಬಿಗಳ ಪಕ್ಕಗಳಲ್ಲಿ, ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ಬಣ್ಣವು ಪೀತರತ್ನದ ಹಾಗೆ ಹೊಳೆಯುತ್ತಿತ್ತು.10ಅವುಗಳ ರೂಪವು ಹೇಗಿತ್ತೆಂದರೆ ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು, ಆ ನಾಲ್ಕು ಒಂದೇ ಮಾದರಿಯಾಗಿದ್ದವು.11ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು, ಓರೆಯಾಗಿ ಹೊರಳುತ್ತಿರಲಿಲ್ಲ; ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.12ಕೆರೂಬಿಗಳ ಬೆನ್ನು, ಕೈ, ರೆಕ್ಕೆ, ಅಂತು ಸರ್ವಾಂಗಗಳಲ್ಲಿಯೂ ಮತ್ತು ಚಕ್ರಗಳಲ್ಲಿಯೂ ಕಣ್ಣುಗಳು ಸುತ್ತಲೂ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು.13ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂಬುದೇ.14ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು, ಎರಡನೆಯದು ಮನುಷ್ಯನದು, ಮೂರನೆಯದು ಸಿಂಹದ್ದು, ನಾಲ್ಕನೆಯದು ಗರುಡಪಕ್ಷಿಯದು.15ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ.16ಕೆರೂಬಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವುಗಳ ಸಂಗಡಲೇ ಏರಿದವು.17ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು.18ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು.19ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಯೆಹೋವನ ಆಲಯದ ಪೂರ್ವ ಬಾಗಿಲಿನ ಮುಂದೆ ನಿಂತವು, ಅವುಗಳ ಮೇಲ್ಗಡೆ ಇಸ್ರಾಯೇಲಿನ ದೇವರ ತೇಜಸ್ಸು ನೆಲಸಿತ್ತು.20ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.21ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ, ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳು ಇದ್ದವು.22ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಆ ಮುಖಗಳೇ; ಪ್ರತಿಯೊಂದು ಜೀವಿಯು ನೇರವಾಗಿಯೇ ಹೋಗುತ್ತಿದ್ದವು.
11ಯೆರೂಸಲೇಮಿನ ದುರಾಲೋಚನೆಕಾರರ ಖಂಡನೆ
1ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.2ಅಲ್ಲಿ ದೇವರು ನನಗೆ, <<ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ.3ಇವರು, <ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ> ಎಂದು ಹೇಳುತ್ತಾರೆ.4ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಅಹಿತವನ್ನು ನುಡಿ, ತಪ್ಪದೆ ನುಡಿ>> ಎಂದು ಆಜ್ಞಾಪಿಸಿದನು.5ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶ ಉಂಟುಮಾಡಿ, ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ, <<ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತನಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.6ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.7<<ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.8ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು> >> ಇದು ಕರ್ತನಾದ ಯೆಹೋವನ ನುಡಿ.9<<ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು.10ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.11ಈ ಪಟ್ಟಣವು ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿನ ಮಾಂಸವಾಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು.12<< <ನಾನೇ ಯೆಹೋವನು> ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.>>13ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ, <<ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ?>> ಎಂದು ಮೊರೆಯಿಟ್ಟೆನು.ಸೆರೆಯವರಿಗೆ ಕೊಟ್ಟ ವಾಗ್ದಾನ
14ಆಗ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,15<<ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇಮಿನವರು ಮತ್ತು ಇಸ್ರಾಯೇಲ್ ವಂಶದವರಲ್ಲಿ ಉಳಿದಿರುವವರು, <ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವತ್ತಾಗಿ ಸಿಕ್ಕಿದೆ> ಎಂದು ಹೀನೈಸಿದರೋ ಅವರೆಲ್ಲರು ಉಳಿದಿದ್ದಾರಲ್ಲಾ.16<<ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.>17<<ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.>18ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯ ವಸ್ತುಗಳನ್ನೂ, ಸಮಸ್ತ ಅಸಹ್ಯ ವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.19<<ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.20ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.21ಆದರೆ ಯಾರ ಮನಸ್ಸು ತಮ್ಮ ಅಸಹ್ಯ ವಸ್ತುಗಳನ್ನೂ, ಅಸಹ್ಯ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು>> ಇದು ಕರ್ತನಾದ ಯೆಹೋವನ ನುಡಿ.ಯೆಹೋವನ ಸಾನ್ನಿಧ್ಯವು ಪಟ್ಟಣಕ್ಕೆ ತಪ್ಪಿದ್ದು
22ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.23ಆಗ ಯೆಹೋವನ ತೇಜಸ್ಸು ಪಟ್ಟಣದ ಮಧ್ಯದೊಳಗಿಂದ ಏರಿ ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು.24ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.25ಯೆಹೋವನು ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆನು.
12ಯೆಹೂದದ ನಾಶದ ಸೂಚನೆ
1ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ನೀನು ದ್ರೋಹಿ ವಂಶದ ಮಧ್ಯದಲ್ಲಿ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.3<<ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿ ವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.4ನೀನು ನಿನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ, ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮದಲ್ಲಿ ಹೊರಟು ಹೋಗು.5ಅವರು ನೋಡುತ್ತಿರುವಾಗ, ನೀನು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ನಿನ್ನ ಸಾಮಗ್ರಿಗಳನ್ನು ಸಾಗಿಸಿಕೊಂಡು ಹೋಗು.6ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆ ಹಾಕಿ, ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮುಖವನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಗುರುತನ್ನಾಗಿ ಮಾಡಿದ್ದೇನೆ.>>7ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಆಚೆಗೆ ಹಾಕಿ, ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯಲ್ಲಿ ಕಿಂಡಿಯನ್ನು ಮಾಡಿ, ಕತ್ತಲಲ್ಲಿ ಆ ಸಾಮಾನನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು.8ಬೆಳಿಗ್ಗೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,9<<ನರಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, <ನೀನು ಏನು ಮಾಡುತ್ತಿರುವೆ?> ಎಂದು ನಿನ್ನನ್ನು ಕೇಳಿದ್ದಾರಲ್ಲವೆ?10ನೀನು ಅವರಿಗೆ ಹೀಗೆ ನುಡಿ, <ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಈ ಹೊರೆಯು ಯೆರೂಸಲೇಮಿನಲ್ಲಿರುವ ರಾಜನಿಗೂ, ಅಲ್ಲಿನ ಇಸ್ರಾಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ.>11ಇದನ್ನೂ ನುಡಿ, <ನಾನು ನಿಮಗೆ ಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವುದು; ಅವರು ವಲಸೆಯಾಗಿ ಸೆರೆ ಹೋಗುವರು.12ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಆಚೆಗೆ ಸಾಗಿಸುವರು; ಅವನು ಮುಖವನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸುವುದಿಲ್ಲ.>13ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯರ ದೇಶವಾದ ಬಾಬೆಲೋನಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡುವುದಿಲ್ಲ.14ಅವನ ಸುತ್ತಲಿನ ಸಕಲ ಸಹಾಯಕರನ್ನೂ, ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.15<<ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು ಅನ್ಯದೇಶಗಳಲ್ಲಿ ಚೆಲ್ಲಾಪಿಲ್ಲಿ ಮಾಡುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.16ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.>>17ಇದಲ್ಲದೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,18<<ನರಪುತ್ರನೇ, ನೀನು ಅನ್ನವನ್ನು ನಡುಗುತ್ತಾ ತಿನ್ನು ಮತ್ತು ನೀರನ್ನು ಹೆದರಿಕೆಯಿಂದ ಕುಡಿ.19ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು, <ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇಮಿನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ, ಅವರು ಅನ್ನವನ್ನು ನಡಗುತ್ತಾ ತಿನ್ನುವರು ಮತ್ತು ನೀರನ್ನು ಹೆದರಿಕೆಯಿಂದ ಕುಡಿಯುವರು; ಏಕೆಂದರೆ ಆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವುದರಿಂದ ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ದೇಶವು ಬರಿದಾಗುವುದು.20ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವುದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.> >>ಯೆಹೂದ್ಯರ ಭರವಸೆಯ ಖಂಡನೆ
21ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,22<<ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?>>23ಅವರಿಗೆ ಹೀಗೆ ಹೇಳು, <<ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಗಾದೆಯನ್ನು ಬಳಸುವುದನ್ನು ನಿಲ್ಲಿಸಿಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ, <ಕ್ಲುಪ್ತಕಾಲವು ಸಮೀಪಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.24ಇನ್ನು ಮೇಲೆ ಇಸ್ರಾಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು, ಮೋಸದ ಕಣಿಯೂ ಇರದು.25ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು> >> ಇದು ಕರ್ತನಾದ ಯೆಹೋವನ ವಾಕ್ಯ.26ಮತ್ತು ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,27<<ನರಪುತ್ರನೇ, ಇಗೋ, ಇಸ್ರಾಯೇಲ್ ವಂಶದವರು, <ಇವನಿಗಾದ ದಿವ್ಯದರ್ಶನವು ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕದ್ದನ್ನು ಮುಂತಿಳಿಸುತ್ತಾನೆ> ಎಂದು ಹೇಳುತ್ತಾರೆ.28<<ಆದಕಾರಣ ನೀನು ಅವರಿಗೆ ಹೀಗೆ ಹೇಳು, <ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ> ಇದು ಕರ್ತನಾದ ಯೆಹೋವನ ನುಡಿ.>>
13ಸುಳ್ಳು ಪ್ರವಾದಿಗಳನ್ನು ಖಂಡಿಸಿದ್ದು
1ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ಪ್ರವಾದನೆ ಮಾಡಿ, ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು, <ಯೆಹೋವನ ವಾಕ್ಯವನ್ನು ಕೇಳಿರಿ.3ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯನ್ನು ಏನೆಂದು ಹೇಳಲಿ!4ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳ ಹಾಗೆ ಇದ್ದಾರೆ.5ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿ ಗೋಡೆಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಭದ್ರ ಮಾಡಲೂ ಇಲ್ಲ. ಯೆಹೋವನು ಇಂತೆನ್ನುತ್ತಾನೆ> ಎಂದು ನುಡಿ,6ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.7ನಾನು ಮಾತನಾಡದೆ ಹೋದರೂ, <ಯೆಹೋವನು ಇಂತೆನ್ನುತ್ತಾನೆ> ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು.8<<ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನೀವು ವ್ಯರ್ಥವಾದದ್ದನ್ನು ನುಡಿದು, ಸುಳ್ಳಾದ ದರ್ಶನವನ್ನು ಕಂಡಿದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ> ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.9<ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು> ಎಂದು ನಿಮಗೆ ಗೊತ್ತಾಗುವುದು.10<<ಅಶಾಂತಿಯಿದ್ದರೂ ಅವರು <ಶಾಂತಿಯಿದೆ> ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;11ಆದಕಾರಣ, ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ, <ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವುದು.>12ಇಗೋ, ಗೋಡೆಯು ಬಿದ್ದ ಮೇಲೆ, <ನೀವು ಬಳಿದ ಸುಣ್ಣ ಎಲ್ಲಿ?> ಎಂದು ನಿಮ್ಮನ್ನು ಕೇಳುವರಲ್ಲವೆ?>>13ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, << <ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶ ಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು, ನನ್ನ ರೋಷದಿಂದ ಆನೆಕಲ್ಲುಗಳು ಸುರಿಯುವವು;14ನೀವು ಸುಣ್ಣಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲ ಸಮಮಾಡಿ ಅದರ ಅಸ್ತಿವಾರವನ್ನು ಬಯಲುಪಡಿಸುವೆನು; ಅದು ಬಿದ್ದುಹೋಗುವುದು ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ ನಾನೇ ಯೆಹೋವನು> ಎಂದು ನಿಮಗೆ ಗೊತ್ತಾಗುವುದು.15ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು,16<ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು> >> ಇದು ಕರ್ತನಾದ ಯೆಹೋವನ ನುಡಿ.ಸುಳ್ಳು ಪ್ರವಾದಿನಿಯರನ್ನು ಖಂಡಿಸಿದ್ದು
17<< <ನರಪುತ್ರನೇ, ಸ್ವಕಲ್ಪಿತವಾದುದನ್ನು ಕಣಿ ಎಂದು ಹೇಳುವ ನಿನ್ನ ಸ್ವಕುಲ ಸ್ತ್ರೀಯರ ಕಡೆಗೆ ಮುಖ ಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು.>18ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಗಳನ್ನು ಕಟ್ಟಿ, ಉದ್ದವಾದವರಿಗೂ, ಗಿಡ್ಡವಾದವರಿಗೂ ತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?19ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.>20<<ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಆಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತು ಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಿಗಳನ್ನು ನಾನು ಬಿಡಿಸಿ, ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು.21ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.22ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.23ಆದಕಾರಣ ನೀವು ಮಿಥ್ಯ ದರ್ಶನವನ್ನು ಹೊಂದಿ, ಕಣಿಹೇಳುವ ಕೆಲಸವು ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು, ನಾನೇ ಯೆಹೋವನು> ಎಂದು ನಿಮಗೆ ಗೊತ್ತಾಗುವುದು.>>
14ವಿಗ್ರಹಾರಾಧಕರನ್ನು ಖಂಡಿಸಿದ್ದು
1ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು,2ನನ್ನ ಮುಂದೆ ಕುಳಿತುಕೊಂಡಿರುವಾಗ ಯೆಹೋವನು ಈ ವಾಕ್ಯವನ್ನು ನನಗೆ ಅನುಗ್ರಹಿಸಿದನು,3<<ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.>>4ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು.5ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.>>6ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ.7<<ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.8ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.9<<ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.10ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು.11ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯುವುದಿಲ್ಲ, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವುದಿಲ್ಲ; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು>> ಇದು ಕರ್ತನಾದ ಯೆಹೋವನ ನುಡಿ.ಶಿಷ್ಟನ ಸಂಬಂಧವಿದ್ದರೂ ದುಷ್ಟನಿಗೆ ದಂಡನೆ ತಪ್ಪದು
12ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,13<<ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.14ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು>> ಇದು ಕರ್ತನಾದ ಯೆಹೋವನ ನುಡಿ.15<<ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ,16ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವುದು>> ಇದು ಕರ್ತನಾದ ಯೆಹೋವನ ನುಡಿ.17<<ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,18ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ>> ಇದು ಕರ್ತನಾದ ಯೆಹೋವನ ನುಡಿ.19<<ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು, ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ,20ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ>> ಇದು ಕರ್ತನಾದ ಯೆಹೋವನ ನುಡಿ.21ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!22ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.23ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು>> ಇದು ಕರ್ತನಾದ ಯೆಹೋವನ ನುಡಿ.
15ಪ್ರಯೋಜನಕ್ಕೆ ಬಾರದ ದ್ರಾಕ್ಷಾಲತೆಯ ಸಾಮ್ಯ
1ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?3ಜನರು ದ್ರಾಕ್ಷಿಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವ ವಸ್ತುವನ್ನಾದರೂ ನೇತು ಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?4ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ.5ಅದು ಸಂಪೂರ್ಣವಾಗಿ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?>>6ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ.7ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.8ಅವರು ದ್ರೋಹ ಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು>> ಇದು ಕರ್ತನಾದ ಯೆಹೋವನ ನುಡಿ.
16ಯೆರೂಸಲೇಮ್ ನಗರಿಯ ಪತಿದ್ರೋಹ
1ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ನೀನು ಯೆರೂಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ,3ಕರ್ತನಾದ ಯೆಹೋವನು ಯೆರೂಸಲೇಮ್ ಎಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ, <ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.4ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಲ್ಲಿ ತಾಯಿಯು ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ, ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲು ಸುತ್ತಲಿಲ್ಲ.5ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿನದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿ ಬಿಟ್ಟರು.6<<ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, <ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು> ಎಂದು ಹೇಳಿದೆನು. ಹೌದು, <ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು> ಎಂದು ಹೇಳಿ ಬದುಕಿಸಿದೆನು.7<ಭೂಮಿಯಲ್ಲಿ ಮೊಳೆಯುವ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಲು, ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ತನಗಳು ಮೂಡಿದವು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ.8ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ> >> ಇದು ಕರ್ತನಾದ ಯೆಹೋವನ ನುಡಿ.9<<ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೈಲವನ್ನು ಹಚ್ಚಿದೆನು.10ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.11ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು,12ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆನು.13ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ.14ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವು ಹೆಸರುವಾಸಿಯಾಗಿ ಜನಾಂಗಗಳಲ್ಲಿ ಹಬ್ಬಿತು>> ಇದು ಕರ್ತನಾದ ಯೆಹೋವನ ನುಡಿ.15<<ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ.16ನೀನು ಪೂಜಾ ಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರ ನಡಿಸಿದೆ. ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು.17ಮತ್ತು ನಾನು ನನ್ನ ಬೆಳ್ಳಿ ಬಂಗಾರದಿಂದ ನಿನಗೆ ಮಾಡಿಸಿಕೊಟ್ಟಿದ್ದ ನಿನ್ನ ಚಂದವಾದ ಆಭರಣಗಳನ್ನು ನೀನು ತೆಗೆದು ಅವುಗಳಿಂದ ಪುರುಷ ಮೂರ್ತಿಗಳನ್ನು ರೂಪಿಸಿಕೊಂಡು ಅವುಗಳೊಡನೆ ವ್ಯಭಿಚಾರ ಮಾಡಿದೆ.18ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ.19ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!>> ಇದು ಕರ್ತನಾದ ಯೆಹೋವನ ನುಡಿ.20<<ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ?21ಅದನ್ನೂ ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ, ಆಹುತಿಕೊಟ್ಟು ಮೂರ್ತಿಗಳಿಗೆ ಅರ್ಪಿಸಿದಿಯೋ?22ಈ ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.23ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!>> ಎಂಬುದು ಕರ್ತನಾದ ಯೆಹೋವನ ನುಡಿ.ಯೆರೂಸಲೇಮಿನ ವ್ಯಭಿಚಾರವನ್ನು ಖಂಡಿಸಿದ್ದು
24<<ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ.25ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನು ಸೇರಿಸಿ ವ್ಯಭಿಚಾರವನ್ನು ಹೆಚ್ಚಾಗಿ ನಡೆಸಿರುವೆ.26ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಬೆರೆತು ಹೆಚ್ಚಾಗಿ ವ್ಯಭಿಚಾರಮಾಡಿ ನನ್ನನ್ನು ರೇಗಿಸಿರುವೆ.27ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು.28ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವ್ಯಭಿಚಾರಮಾಡಿದಿ; ಹೌದು, ಅವರೊಡನೆ ವ್ಯಭಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.29ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ, ಅಲ್ಲಿಯೂ ಬಹಳ ವ್ಯಭಿಚಾರಮಾಡಿದೆ, ಆದರೂ ನಿನಗೆ ತೃಪ್ತಿಯಾಗಲಿಲ್ಲ.>>30ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿರುವೆ.31ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ, ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ವ್ಯಭಿಚಾರಿಯಂತೆ ನೀನು ನಡೆಯುವವಳಲ್ಲ.32<<ನೀನು ವ್ಯಭಿಚಾರಮಾಡುವ ಪತಿವ್ರತೆ! ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!33ಎಲ್ಲಾ ಕಡೆ ವ್ಯಭಿಚಾರಿ ಸ್ತ್ರೀಗೆ ಹಣಕೊಡುವುದುಂಟು; ನೀನಾದರೋ ನಿನ್ನ ಪ್ರಿಯರಿಗೆಲ್ಲ ನೀನೇ ಹಣವನ್ನು ಕೊಡುತ್ತಿರುವೆ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.34ನಿನ್ನ ವ್ಯಭಿಚಾರಕ್ಕೂ, ಇತರ ವೇಶ್ಯೆಯರ ವ್ಯಭಿಚಾರಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರ ಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ!>>35ಹೀಗಿರಲು ವ್ಯಭಿಚಾರಿಯೇ, ಯೆಹೋವನ ಈ ವಾಕ್ಯವನ್ನು ಕೇಳು,36ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆಹಾ, ಮಿತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಪ್ರಿಯರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,37ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.38ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.39ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ಮಂಟಪವನ್ನು ಕೆಡವಿ, ನಿನ್ನ ಜಗಲಿಗಳನ್ನು ಒಡೆದು, ನಿನ್ನ ಬಟ್ಟೆಗಳನ್ನು ಕಿತ್ತು ನಿನ್ನ ಒಡವೆಗಳನ್ನು ಸುಲಿದುಕೊಂಡು, ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.40ಅವರು ನಿನ್ನ ವಿಚಾರವಾಗಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು, ಕತ್ತಿಗಳಿಂದ ಹತಿಸುವರು.41ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಹಣಕೊಡದಿರುವಿ.42ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.43<<ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ>> ಇದು ಕರ್ತನಾದ ಯೆಹೋವನ ನುಡಿ.44<<ಆಹಾ, ಗಾದೆಗಳಲ್ಲಿ ಜಾಣರು <ತಾಯಿಯಂತೆ ಮಗಳು> ಎಂಬ ಗಾದೆಯನ್ನು ನಿನ್ನ ವಿಷಯವಾಗಿ ನುಡಿಯುವರು.45ಗಂಡನಿಗೂ, ಮಕ್ಕಳಿಗೂ ಬೇಸರಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ, ಮಕ್ಕಳಿಗೂ ಬೇಸರಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.46ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.47ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.>>48ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಜೀವದಾಣೆ, ನೀನೂ ನಿನ್ನ ಕುಮಾರ್ತೆಯರೂ ನಡೆದಂತೆ ಸೊದೋಮೆಂಬ ನಿನ್ನ ತಂಗಿಯಾಗಲಿ, ಆಕೆಯ ಕುಮಾರ್ತೆಯರಾಗಲಿ ನಡೆಯಲಿಲ್ಲ.49ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.50ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.51ಸಮಾರ್ಯವೆಂಬಾಕೆಯು ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.52ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯ ಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.53<<ಸೊದೋಮ್ ಮತ್ತು ಆಕೆಯ ಕುಮಾರ್ತೆಯರು, ಸಮಾರ್ಯ ಮತ್ತು ಆಕೆಯ ಕುಮಾರ್ತೆಯರು, ಇವರ ದುರಾವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರಾವಸ್ಥೆಯನ್ನೂ ತಪ್ಪಿಸುವೆನು.54ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ.55ಆಗ ಸಮಾರ್ಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಮತ್ತು ಅವರ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ಸೇರುವರು, ನೀನೂ ನಿನ್ನ ಕುಮಾರ್ತೆಯರೂ ನಿಮ್ಮ ಪೂರ್ವಸ್ಥಿತಿಗೆ ಸೇರುವಿರಿ.56ಅರಾಮಿನ ಕುಮಾರ್ತೆಯರು ಮತ್ತು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮೊದಲು,57ನಿನ್ನ ಕೆಟ್ಟತನವು ಬಯಲಿಗೆ ಬರುವುದಕ್ಕೆ ಮೊದಲು, ಆ ನಿನ್ನ ಗರ್ವಕಾಲದಲ್ಲಿ ಅರಾಮ್ಯರ ಪುತ್ರಿಯರಿಂದಲೂ ಮತ್ತು ಫಿಲಿಷ್ಟಿಯರ ಪುತ್ರಿಯರಿಂದಲೂ ನಿನ್ನ ಹೆಸರು ಅವರ ಬಾಯಲ್ಲಿ ಬರಲೇ ಇಲ್ಲ.58ಈಗ ನಿನ್ನ ದುರ್ನಡತೆಯ ಮತ್ತು ದುರಾಚಾರಗಳ ಫಲವನ್ನು ನೀನು ಅನುಭವಿಸಬೇಕಾಗಿ ಬಂತು>> ಇದು ಯೆಹೋವನ ನುಡಿ.59ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.60ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.61ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.62ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.63ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ>> ಇದು ಕರ್ತನಾದ ಯೆಹೋವನ ನುಡಿ.
17ಹದ್ದುಗಳ ಮತ್ತು ಗಿಡಗಳ ಸಾಮ್ಯಗಳು
1ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು,3ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು.4ತುಟ್ಟತುದಿಯ ಚಿಗುರುಗಳನ್ನು ಕಚ್ಚಿ, ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ಬಹಳ ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು.5<< <ಆಮೇಲೆ ಅದು ಆ ದೇವದಾರು ಇದ್ದ ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂಮಿಯಲ್ಲಿ ನೆಟ್ಟು, ನೀರವಂಜಿಯ ಮರದ ಹಾಗೆ ಬೆಳೆಯಿಸಿತು.6ಅದು ಮೊಳೆತು ದ್ರಾಕ್ಷಾಲತೆಯಾಗಿ ತುಂಬಾ ಹರಡಿಕೊಂಡು ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ ಅದರ ಕೆಳಗೆ ತನ್ನ ಬೇರುಗಳನ್ನು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು.7<< <ಅಗಲವಾದ ರೆಕ್ಕೆಗಳುಳ್ಳ ಗರಿ ತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.8ಅದು ಸೊಂಪಾದ ದ್ರಾಕ್ಷಾಲತೆಯಾಗಿ ರೆಂಬೆಗಳನ್ನು ಹರಡಿ ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.> >>9ಈ ಮಾತನ್ನು ನುಡಿ, <<ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅದು ಸಮೃದ್ಧವಾಗಿಯೇ ಇರುವುದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು, ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದು ಬೇರು ಸಹಿತ ಕೀಳಲ್ಪಡುವುದು; ಬಹಳ ಬಲದಿಂದಲ್ಲ, ಬಹಳ ಜನರಿಂದಲ್ಲ.10ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವುದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವುದಲ್ಲವೇ? ಬೆಳೆದ ಪಾತಿಯಲ್ಲಿಯೇ ಒಣಗಿಹೋಗುವುದು.>>ಸಾಮ್ಯದ ಅರ್ಥ
11ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,12<<ದ್ರೋಹಿ ವಂಶದವರಾದ ಈ ಜನರಿಗೆ ಹೀಗೆ ಹೇಳು, ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಮತ್ತು ಪ್ರಧಾನರನ್ನೂ ಹಿಡಿದು ಬಾಬೆಲೋನಿಗೆ ತೆಗೆದುಕೊಂಡು ಹೋದನು.13ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿದನು.14ಇವನ ರಾಜ್ಯವು ಮೇಲಕ್ಕೆ ಏಳಲಾರದೆ ಇದ್ದರೂ, ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು.15ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?>>16ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಜೀವದಾಣೆ, ಇವನು ಯಾರಿಂದ ಅರಸನಾಗಿ ನೇಮಿಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾರ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವುದು ಖಂಡಿತ.17ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಕೋಟೆಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗುವುದಿಲ್ಲ.18ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಆಣೆಮಾಡಿದರೆ ಪ್ರಯೋಜನವೇನು? ಇದನ್ನೆಲ್ಲಾ ಮಾಡಿದ್ದರಿಂದ ಇವನು ಪಾರಾಗನು.>>19ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ, ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು.20ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬೆಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.21ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.>>22ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು.23ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.24ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರಗೊಳಿಸಿ, ಹಸುರಾದದ್ದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವವು. ಇದನ್ನು ಯೆಹೋವನಾದ ನಾನೇ ನುಡಿದು ನಡೆಸಿದ್ದೇನೆ.>>
18ಕರ್ಮಫಲಾನುಭವದ ನ್ಯಾಯ
1ಯೆಹೋವನು ಮತ್ತೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,2<<ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಆದರೆ, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?>>3ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.4ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.5<<ಒಬ್ಬನು ಸದ್ಧರ್ಮಿಯಾಗಿ ನೀತಿ ನ್ಯಾಯಗಳನ್ನು ನಡೆಸಿ,6ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,7ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,8ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,9ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು>> ಇದು ಕರ್ತನಾದ ಯೆಹೋವನ ನುಡಿ.10<<ಇಂಥವನನ್ನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,11ಒಳ್ಳೆಕಾರ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ,12ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,13ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.14<<ಇಗೋ, ಇವನು ಪಡೆದ ಮಗನು, ತನ್ನ ತಂದೆಯು ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು ಇಂಥಾ ಕಾರ್ಯಗಳನ್ನು ನಡೆಸದೆ,15<<ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,16ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,17ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.18ಇವನ ತಂದೆಯೋ, ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.19<<ಆದರೆ ನೀವು, <ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ> ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.20ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.21<<ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.22ಅವನು ಮಾಡಿದ ಯಾವ ಅಪರಾಧವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.>>23ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.24ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.25<<ಆದರೆ ನೀವು, <ಕರ್ತನ ಕ್ರಮವು ಸರಿಯಲ್ಲ> ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ.26ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.27ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.28ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.29ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಿಲ್ಲವೋ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.>>30ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.31<<ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?32ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ>> ಇದು ಕರ್ತನಾದ ಯೆಹೋವನ ನುಡಿ.
19ಯೆಹೂದದ ರಾಜರ ವಿಷಯವಾದ ಶೋಕ ಗೀತೆ
1<<ಇಸ್ರಾಯೇಲಿನ ರಾಜರ ವಿಷಯವಾಗಿ ಈ ಶೋಕ ಗೀತೆಯನ್ನು ಹಾಡು,
2<ಆಹಾ, ನಿನ್ನ ತಾಯಿಯು ಸಿಂಹಗಳ ಮಧ್ಯೆ ಸಿಂಹಿಣಿ,ಸಾಕಿದಳು ತನ್ನ ಮರಿಗಳನ್ನು, ಯುವ ಸಿಂಹಗಳ ನಡುವೆ ವಾಸಿಸಿ.
3ಅವಳು ಬೆಳೆಯಿಸಿದ ಒಂದು ಮರಿಯು ಪ್ರಾಯದ ಸಿಂಹವಾಗಿ, ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು.
4ಜನಾಂಗಗಳು ಈ ವಾರ್ತೆಯನ್ನು ಕೇಳಿ, ಅದಕ್ಕೆ ಗುಂಡಿ ತೋಡಲು ಅದು ಅಲ್ಲಿ ಸಿಕ್ಕಿಬಿದ್ದಿತು; ಅದನ್ನು ಸರಪಣಿಗಳಿಂದ ಬಿಗಿದು ಐಗುಪ್ತ ದೇಶಕ್ಕೆ ಒಯ್ದರು. 5ಆ ಸಿಂಹಿಣಿಯು ತಾನು ಕಾದುಕೊಂಡಿದ್ದರೂ, ತನ್ನ ನಿರೀಕ್ಷೆಯು ಹಾಳಾಯಿತೆಂದು ತನ್ನ ಮರಿಗಳಲ್ಲಿ ಇನ್ನೊಂದನ್ನು ತೆಗೆದು ಸಾಕಿ, ಪ್ರಾಯಕ್ಕೆ ತಂದಳು.
6ಅದು ಪ್ರಾಯದ ಸಿಂಹವಾಗಿ, ಸಿಂಹಗಳ ನಡುವೆ ತಿರುಗುತ್ತಾ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು.
7ಅದು ಪಟ್ಟಣಗಳನ್ನು ಹಾಳುಮಾಡಿ, ಬಹಳ ಮಂದಿ ವಿಧವೆಯರಾದವರನ್ನು ಕೆಡಿಸಿತು,ಅದರ ಗರ್ಜನೆಯ ಶಬ್ದಕ್ಕೆ ದೇಶವು ಮತ್ತು ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು.
8ಆಗ ಜನಾಂಗಗಳು ಸುತ್ತಲಿನ ರಾಷ್ಟ್ರಗಳಿಂದ ಕೂಡಿ ಬಂದು, ಅದಕ್ಕೆ ವಿರುದ್ಧವಾಗಿ ನಿಂತು,ಬಲೆಯೊಡ್ಡಿ ಗುಂಡಿ ತೋಡಲು, ಅದು ಅಲ್ಲಿ ಸಿಕ್ಕಿಬಿದ್ದಿತು.
9ಅದನ್ನು ಸರಪಣಿಗಳಿಂದ ಬಿಗಿದು, ಪಂಜರದಲ್ಲಿ ಹಾಕಿ, ಬಾಬೆಲಿನ ಅರಸನ ಬಳಿಗೆ ತಂದವು.ಅದರ ಧ್ವನಿಯು ಇಸ್ರಾಯೇಲಿನ ಪರ್ವತಗಳಲ್ಲಿ ಇನ್ನು ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿ ಬಿಟ್ಟವು.
10<< <ನಿನ್ನ ಹೆತ್ತ ತಾಯಿ ನೀರಾವರಿಯಲ್ಲಿ ನಾಟಿಕೊಂಡಿದ್ದ ದ್ರಾಕ್ಷಾಲತೆಯಾಗಿದ್ದಳು,ಆ ಲತೆಯು ತುಂಬಾ ನೀರಾವರಿಯಿಂದ ಫಲವತ್ತಾಗಿಯೂ, ಪೊದೆಯಾಗಿಯೂ ಬೆಳೆದಿತ್ತು.
11ಅದರಲ್ಲಿ ಆಳುವವರ ರಾಜದಂಡಗಳಿಗೆ ಯೋಗ್ಯವಾದ ಗಟ್ಟಿಕೊಂಬೆಗಳಿದ್ದವು,ಅವುಗಳ ಎತ್ತರವು ಉಳಿದ ರೆಂಬೆಗಳಿಗಿಂತ ಹೆಚ್ಚಾಗಿತ್ತು, ಬಹಳ ರೆಂಬೆಗಳ ಮಧ್ಯದಲ್ಲಿ ಉದ್ದುದ್ದವಾಗಿ ಕಾಣಿಸಿದವು.
12ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು,ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.
13ಈಗ ಅದು ನೀರಿಲ್ಲದೆ ಬೆಂಗಾಡಿನಲ್ಲಿ ನಾಟಿಕೊಂಡಿದೆ. 14ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ.ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.> ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.>>
20ಇಸ್ರಾಯೇಲರ ದಂಗೆ
1ಏಳನೆಯ ವರ್ಷದ, ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆ ಕೇಳುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.2ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,3<<ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನನ್ನನ್ನು ಪ್ರಶ್ನೆ ಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ> >> ಇದು ಕರ್ತನಾದ ಯೆಹೋವನ ನುಡಿ.4<<ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಇವರ ಪೂರ್ವಿಕರ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು,5ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಯಾವ ದಿನದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು, ಯಾಕೋಬ ಸಂತಾನದವರಿಗೆ ಮಾತುಕೊಟ್ಟು, ನಾನು ನಿಮ್ಮ ದೇವರಾದ ಯೆಹೋವನು> ಎಂದು ಐಗುಪ್ತ ದೇಶದಲ್ಲಿ ಪ್ರಮಾಣ ಪೂರ್ವಕವಾಗಿ ತಿಳಿಯಪಡಿಸಿದೆನೋ,6ಆ ದಿನದಲ್ಲಿ ನಾನು ಅವರಿಗೆ, <ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲೂ ಮತ್ತು ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು> ಎಂದು ಪ್ರಮಾಣಮಾಡಿದೆನು.7<ನೀವೆಲ್ಲರೂ ನಿಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಬಿಸಾಡಿಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು> >> ಎಂಬುದಾಗಿ ಅವರನ್ನು ಎಚ್ಚರಿಸಿದೆನು.8<< <ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು> ಅಂದುಕೊಂಡೆನು.9<ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.10ಆಗ ನಾನು ಅವರನ್ನು ಐಗುಪ್ತ ದೇಶದೊಳಗಿಂದ ಬಿಡಿಸಿ, ಅರಣ್ಯಕ್ಕೆ ಕರೆದು ತರಲು,11ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.12ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು.13<< <ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು> ಅಂದುಕೊಂಡೆನು.14<ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.15ಆ ಮೇಲೆ ಸಕಲ ದೇಶ ಶಿರೋಮಣಿಯಾದ ಯಾವ ದೇಶವನ್ನು ವಾಗ್ದಾನಮಾಡಿದೆನೋ, ಹಾಲೂ ಮತ್ತು ಜೇನು ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸುವುದಿಲ್ಲ ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು.16ಏಕೆಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತರಾಗಿ, ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.17ಆದರೂ ನಾನು ಅವರನ್ನು ನಾಶ ಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.> >>18ಆ ಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ, <<ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ, ಅವರ ವಿಧಿಗಳನ್ನು ಕೈಕೊಳ್ಳದೆ, ಅವರ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳದೆ ಇರಬೇಕು.19ನಾನು ನಿಮ್ಮ ದೇವರಾದ ಯೆಹೋವನು; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನಡೆಯಿರಿ.20ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ಪರಿಶುದ್ಧ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ಮತ್ತು ನನಗೂ ಗುರುತಾಗಿರುವುವು>> ಎಂದು ಹೇಳಿದೆನು.21<<ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು >> ಅಂದುಕೊಂಡೆನು.22<<ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.23ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶದಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಪ್ರಮಾಣ ಮಾಡಿ ಹೇಳಿದೆ.24ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚೆಲ್ಲಾಪಿಲ್ಲಿಯಾಗಿಸುವೆನು.>> ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.25<<ಇದಲ್ಲದೆ, ನಾನೇ ಯೆಹೋವನು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ, ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆನು.26ಅವರು ತಮ್ಮ ಚೊಚ್ಚಲಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರಾವಸ್ಥೆಗೆ ತಂದೆನು.>>27ಹೀಗಿರಲು, <<ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಈ ಮಾತನ್ನು ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನಿಮ್ಮ ಪೂರ್ವಿಕರು ಇನ್ನೂ ಒಂದು ದ್ರೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ.28ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.>29ನೀವು ಹೋಗುವ, <ಬಾಮಾ ಎಂಬ ಪೂಜಾಸ್ಥಾನ ಇದು ಎಂಥ ಸ್ಥಳ?> >> (ಇಂದಿನ ವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂದೇ ಹೆಸರು).ನ್ಯಾಯತೀರ್ಮಾನ ಮತ್ತು ಪುನಸ್ಥಾಪನೆ
30ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಿಮ್ಮ ಪೂರ್ವಿಕರಂತೆ ನಿಮ್ಮನ್ನು ನೀವೇ ಹೊಲಸು ಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯ ವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹ ಮಾಡುತ್ತೀರೋ?31ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧ ಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸುವುದಿಲ್ಲ>> ಇದು ಕರ್ತನಾದ ಯೆಹೋವನ ನುಡಿ.32<<ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.>>ಶಿಕ್ಷಿಸುವ ಹಾಗೂ ಕ್ಷಮಿಸುವ ದೇವರು
33ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು.34ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಕೂಡಿಸುವೆನು.35ಜನಾಂಗಗಳ ಮಧ್ಯದ ಅರಣ್ಯಕ್ಕೆ ಕರೆ ತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.36ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾದಿಸಿದಂತೆ, ನಿಮ್ಮ ಸಂಗಡಲೂ ವಾದಿಸುವೆನು>> ಇದು ಕರ್ತನಾದ ಯೆಹೋವನ ನುಡಿ.37<<ನಾನು ನಿಮ್ಮನ್ನು ಲೆಕ್ಕಿಸುವಂತೆ, ದಂಡನೆಯ ಕೋಲಿನ ಕೆಳಗೆ ಹೋಗುವಂತೆ ಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು.38ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು>> ಎಂದು ನಿಮಗೆ ಗೊತ್ತಾಗುವುದು.39ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.>>40ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.41ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.42ನಾನು ಪ್ರಮಾಣಮಾಡಿ, ನಿಮ್ಮ ಪೂರ್ವಿಕರಿಗೆ ಯಾವ ದೇಶವನ್ನು ಕೊಟ್ಟೆನೋ, ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.43ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.44ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ, ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ, ನನ್ನ ಹೆಸರಿನ ನಿಮಿತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು>> ಇದು ಕರ್ತನಾದ ಯೆಹೋವನ ನುಡಿ.ಕಾಡುಗಿಚ್ಚಿನ ಸಾಮ್ಯ
45ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,46<<ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ತಾಪವನ್ನೆತ್ತಿ,47ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು.48ಅದನ್ನು ಹೊತ್ತಿಸಿದವನು ಯೆಹೋವನಾದ ನಾನೇ ಎಂಬುದು ಸಕಲ ನರಪ್ರಾಣಿಗಳಿಗೂ ಗೋಚರವಾಗುವುದು; ಅದು ಆರಿಹೋಗದು.>49<<ಆಗ ನಾನು, <ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?> ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ>> ಎಂಬುದಾಗಿ ಅರಿಕೆಮಾಡಿದೆನು.
21ಯೆಹೋವನ ಖಡ್ಗ, ಪ್ರವಾದಿಯ ದುಃಖ
1ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ,3ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, <ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.4ನಾನು ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗವು ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರದವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು.5ಆಗ ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ> ಎಂಬುದು ಎಲ್ಲಾ ನರಮನುಷ್ಯರಿಗೂ ಗೊತ್ತಾಗುವುದು; ಅದು ಪುನಃ ಒರೆಗೆ ಸೇರದು.>>6<<ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.7<ಏಕೆ ನರಳಾಡುತ್ತೀ?> ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, <ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು> ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.>>ಖಡ್ಗ ಗೀತೆ
8ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,9<<ನರಪುತ್ರನೇ, ಕರ್ತನು ಇಂತೆನ್ನುತ್ತಾನೆ ಎಂಬುದಾಗಿ ನುಡಿದು ಹೀಗೆ ಸಾರು,<ಆಹಾ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ!
10ಸಂಹರಿಸುವಂತೆ ಸಾಣೆ ಹಿಡಿದಿದೆ, ಮಿಂಚುವಂತೆ ಮಸೆದಿದೆ;ನಮ್ಮ ಕುಮಾರನ ರಾಜದಂಡವು ಉಳಿದ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬುದಾಗಿ ನಾವು ಸಂಭ್ರಮಪಡಬಹುದೇ?
11ಖಡ್ಗವು ಕೈಗೆ ಸಿಗುವಂತೆ ಮಸೆದು ಸಿದ್ಧವಾಗಿದೆ,ಘಾತಕನ ಕೈಗೆ ಈಡಾಗುವ ಹಾಗೆ ಸಾಣೆಹಿಡಿದಿದೆ, ಮಸೆದಿದೆ.
12ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ;ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.> >>
13ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು? 14ನರಪುತ್ರನೇ, ನೀನು ದೈವೋಕ್ತಿಯನ್ನು ಸಾರಿ ಚಪ್ಪಾಳೆ ಹೊಡಿ; ಖಡ್ಗವು ಎರಡರಷ್ಟು, ಮೂರರಷ್ಟು ಸಂಹರಿಸಲಿ!ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ, ಅಧಿಪತಿಯನ್ನು ಹತಿಸುವ ಖಡ್ಗ!
15ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!
16ಖಡ್ಗವೇ, ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಖಡ್ಗದ ಮೊನೆಯಿದ್ದ ಕಡೆಗೇ ಹೊರಡು.
17ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.>>ಶತ್ರು ರಾಜನ ಆಗಮನ
18ಯೆಹೋವನು ನನಗೆ ಮತ್ತೊಂದು ವಾಕ್ಯವನ್ನು ದಯಪಾಲಿಸಿದನು,19<<ನರಪುತ್ರನೇ, ಬಾಬೆಲಿನ ಅರಸನ ಖಡ್ಗವು ಬರುವುದಕ್ಕೆ ಎರಡು ದಾರಿಗಳ ನಕ್ಷೆಯನ್ನು ಬರೆ; ಅವೆರಡು ಒಂದೇ ದೇಶದಿಂದ ಹೊರಟ ಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.20ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.21<<ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.22ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ,ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ,
ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.
23ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು;ಆದರೆ ಅವನು ಅವರ ಅಧರ್ಮವನ್ನು ಬಯಲಿಗೆ ತರಲು ಅವನ ಕೈಗೆ ಸಿಕ್ಕಿಬೀಳುವರು.>>
ಚಿದ್ಕೀಯನ ದುರ್ಗತಿ
24ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಿಮ್ಮ ಅಪರಾಧಗಳು ಬಯಲಿಗೆ ಬಂದು,ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ತಲೆದೋರಿ,
ನೀವು ನಿಮ್ಮ ಅಧರ್ಮವನ್ನು ನನ್ನ ಜ್ಞಾಪಕಕ್ಕೆ ತಂದು,
ಪಾಪಿಗಳಾಗಿ ನನ್ನ ನೆನಪಿಗೆ ತಂದಿರುವಿರಿ. ಆದುದರಿಂದ ಶತ್ರುವಿನ ಕೈಗೆ ಸಿಕ್ಕಿ ಬೀಳುವಿರಿ.
25ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತಿರವಾಗಿದೆ; ಇದೇ ನಿನ್ನ ಅಪರಾಧದ ಕಡೆಗಾಲ.>>
26ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ತೆಗೆದುಹಾಕು! ಅದು ಹಾಗೆಯೇ ಇರುವುದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ, ಹೆಚ್ಚಿಸಲ್ಪಟ್ಟವನನ್ನು ತಗ್ಗಿಸುವೆನು.27ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.>>ಅಮ್ಮೋನಿನ ಮೇಲೆ ಬೀಳುವ ಖಡ್ಗ
28ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, <<ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ.29ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.30<< <ಕತ್ತಿಯನ್ನು ಒರೆಗೆ ಸೇರಿಸು. ನಿನ್ನ ಸೃಷ್ಟಿಯಾದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ ನಿನಗೆ ನ್ಯಾಯ ತೀರಿಸುವೆನು.31ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.32ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು; ನೀನು ಇನ್ನು ಜ್ಞಾಪಕಕ್ಕೆ ಬರುವುದಿಲ್ಲ> ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.>>
22ಯೆರೂಸಲೇಮಿನ ಘೋರಪಾಪ
1ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು,3ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ! ನಿನ್ನ ಕೇಡಿಗಾಗಿ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ!4ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿ, ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ, ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.5ಅಶುದ್ಧವಾದ ನಗರವೇ, ಗದ್ದಲಕ್ಕೆ ಪ್ರಸಿದ್ಧವಾದ ನಗರಿಯೇ, ಹತ್ತಿರದವರೂ, ದೂರದವರೂ ನಿನ್ನನ್ನು ಹಾಸ್ಯಮಾಡುವರು.6<< <ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.7ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.8ನೀನು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದ್ದಿ.9ನಿನ್ನಲ್ಲಿ ಚಾಡಿಕೋರರು ರಕ್ತ ಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡೆಸಿದ್ದಾರೆ.10ನಿನ್ನವರು ತಂದೆಗೆ ಮಾನಭಂಗ ಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.11ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅತ್ಯಾಚಾರ ಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗಪಡಿಸಿದ್ದಾನೆ.12ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.13<< <ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ.14ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.15ನಾನು ನಿನ್ನನ್ನು ಜನಾಂಗಗಳಲ್ಲಿ ಚದುರಿಸಿ, ದೇಶ ದೇಶಗಳಿಗೆ ಹರಡಿಸಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು.16ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.> >>ದೇವರ ಕುಲುಮೆ
17ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,18<<ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ ಮತ್ತು ಕಂದು ಬೆಳ್ಳಿಯ ಹಾಗೆ ಇದ್ದಾರೆ.19ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನೀವೆಲ್ಲರು ಕಲ್ಮಷವಾಗಿರುವುದರಿಂದ ಇಗೋ, ನಿಮ್ಮನ್ನು ಯೆರೂಸಲೇಮಿನೊಳಕ್ಕೆ ಸೇರಿಸುವೆನು.20ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ,, ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಇಟ್ಟು ಕರಗಿಸುವೆನು.21ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಹಾಕಿ, ಊದಲು ನೀವು ಅದರೊಳಗೆ ಕರಗಿ ಹೋಗುವಿರಿ.22ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.> >>ಯೆರೂಸಲೇಮಿನ ನಾಯಕರ ಪಾಪ
23ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,24<<ನರಪುತ್ರನೇ, ಆ ನಾಡಿಗೆ ಹೀಗೆ ಹೇಳು, <ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.>25ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.26ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.28ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವ್ಯರ್ಥ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, <ಕರ್ತನಾದ ಯೆಹೋವನು ಇಂತೆನ್ನುತ್ತಾನೆ> ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ.29ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ.30<< <ನಾನು ದೇಶವನ್ನು ಹಾಳು ಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ ಪೌಳಿ ಗೋಡೆಯ ಬಿರುಕಿನಲ್ಲಿ ನಿಲ್ಲುವುದಕ್ಕೂ, ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.31ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.> ಇದು ಕರ್ತನಾದ ಯೆಹೋವನ ನುಡಿ.>>
23ವ್ಯಭಿಚಾರಿಯಾದ ಸಹೋದರಿಯರಿಬ್ಬರ ಸಾಮ್ಯ
1ಯೆಹೋವನು ಮತ್ತೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು.3ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.4ಅವರ ಹೆಸರುಗಳೇನೆಂದರೆ: ಹಿರಿಯವಳ ಹೆಸರು ಒಹೊಲ ಮತ್ತು ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರ್ಯವನ್ನೂ, ಒಹೊಲೀಬ ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ.5<<ಒಹೊಲಳು ನನ್ನ ವಶವಾಗಿರುವಾಗಲೇ, ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯರನ್ನು,6ಅವರೆಲ್ಲರೂ ನೇರಳೆ ಬಣ್ಣದಿಂದ ಹೊದಿಸಲ್ಪಟ್ಟ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಎಲ್ಲಾ ಯುವಕರೂ, ಕುದರೆಗಳ ಮೇಲೆ ಸವಾರಿಮಾಡುವ ರಾಹುತರೂ ಆಗಿರುವವರನ್ನು ಮೋಹಿಸಿದಳು.7ಅವರಿಗೆ ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.8ಅವಳು ಐಗುಪ್ತದಲ್ಲಿ ವಾಸಿಸುವ ದಿನದವರೆಗೂ ತನ್ನ ವ್ಯಭಿಚಾರವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ಒತ್ತಿ, ಅವಳ ಸಂಗಡ ವ್ಯಭಿಚಾರಿಕೆಯನ್ನು ಹೆಚ್ಚೆಚ್ಚಾಗಿ ನಡೆಸಿದರು.9<<ಆದಕಾರಣ ನಾನು ಅವಳನ್ನು ಅವಳ ಪ್ರಿಯರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು.10ಇವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಮತ್ತು ಅವಳ ಗಂಡು, ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.>>11<<ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ವ್ಯಭಿಚಾರಕ್ಕಿಂತ ಹೆಚ್ಚಾದ ವ್ಯಭಿಚಾರವನ್ನು ನಡೆಸಿ, ಅವಳನ್ನು ಮೀರುವಷ್ಟು ಕೆಟ್ಟವಳಾದಳು.12ಇವಳು ತನ್ನ ನೆರೆಯವರಾದ ಅಶ್ಶೂರ್ಯರನ್ನೂ, ನಾಯಕರನ್ನೂ, ಅಧಿಕಾರಿಗಳನ್ನು ವಿಚಿತ್ರವಾಗಿ ಉಡುಪು ಧರಿಸಿ ಕುದರೆಗಳ ಮೇಲೆ ಸವಾರಿಮಾಡುವ ರಾಹುತರನ್ನು, ಸುಂದರವಾದ ಯುವಕರನ್ನು ಮೋಹಿಸಿದಳು.13ಇವಳೂ ಅಪವಿತ್ರಳಾಗಿ ಹೋದದ್ದನ್ನು ನೋಡಿದೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದವರು.14<<ಇವಳು ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು; ಗೋಡೆಯ ಮೇಲೆ ಚಿತ್ರಿಸಲ್ಪಟ್ಟ ಕಸ್ದೀಯರ ಪುರುಷರನ್ನು ನೋಡಿದಳು.15ಅವರು ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ತಮ್ಮ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಪುತ್ರರ ಹಾಗಿರುವ ಆಕಾರಗಳು ಗೋಡೆಯಲ್ಲಿ ಕಿರುಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ,16ಇವಳು ಮೋಹಗೊಂಡು, ಕಸ್ದೀಯ ದೇಶಕ್ಕೆ ದೂತರನ್ನು ಕಳುಹಿಸಿದಳು.17ಆಗ ಬಾಬೆಲಿನವರು ಇವಳ ಪ್ರೀತಿಯ ಮಂಚವನ್ನೇರಿ ತಮ್ಮ ವ್ಯಭಿಚಾರಿಕೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಅಪವಿತ್ರವಾಗಲು, ಅವಳಿಗೆ ಈ ಬಗ್ಗೆ ಜಿಗುಪ್ಸೆಯಾಯಿತು.18ಹೀಗೆ ಇವಳು ವ್ಯಭಿಚಾರವನ್ನು ಮಾಡಿ, ತನ್ನ ಬೆತ್ತಲೆತನವನ್ನು ಬಯಲುಪಡಿಸಿಕೊಂಡಾಗ, ತನ್ನ ಪ್ರೀತಿಯು ಮೊದಲು ಇವಳ ಅಕ್ಕನಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.19ಆದರೂ ಇವಳು ತಾನು ಐಗುಪ್ತ ದೇಶದಲ್ಲಿ ವ್ಯಭಿಚಾರಿಯಾಗಿದ್ದ ತನ್ನ ಎಳೆಯ ಪ್ರಾಯವನ್ನು ಜ್ಞಾಪಕಮಾಡಿಕೊಂಡು, ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು.20ಕತ್ತೆಗಳಂತೆ ಬೆದೆಯುಳ್ಳವರೂ, ಕುದುರೆಗಳಂತೆ ದಾಟುವವರೂ ಆದ ಕಸ್ದೀಯ ವೀರರನ್ನು ಮೋಹಿಸಿದಳು.21ಹೀಗೆ ಐಗುಪ್ತ್ಯರಿಂದ ನಿನ್ನ ಯೌವನದ ಸ್ತನಗಳ ತೊಟ್ಟುಗಳನ್ನು ಬತ್ತಿಸಿಕೊಂಡ, ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.>>ಒಹೊಲೀಬಳಿಗೆ ಆದ ಶಿಕ್ಷೆ
22ಆದುದರಿಂದ ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆಹಾ, ಯಾರಿಂದ ನಿನ್ನ ಆಶೆ ತೊಲಗಿತೋ, ಆ ನಿನ್ನ ಪ್ರಿಯನನ್ನು ನಾನು ನಿನ್ನ ವಿರುದ್ಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ನಿನ್ನ ವಿರುದ್ಧವಾಗಿ ತರುತ್ತೇನೆ.23ಬಾಬಿಲೋನಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು ಮತ್ತು ಎಲ್ಲಾ ಅಶ್ಶೂರ್ಯರೆಲ್ಲರೊಂದಿಗೂ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ, ಸೈನ್ಯಾಧಿಪತಿಗಳೂ, ಅಧಿಕಾರಸ್ಥರೂ, ಯುದ್ಧವೀರರು, ಖ್ಯಾತಿ ಹೊಂದಿದವರೂ, ಎಲ್ಲರೂ ಕುದರೆಗಳ ಮೇಲೆ ಬೀಳುವಂತೆ ಮಾಡುವೆನು.24ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುರಾಣಿಗಳನ್ನೂ, ಶಿರಸ್ತ್ರಾಣವನ್ನೂ, ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸುವರು.25ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು, ಅವರು ನಿನ್ನಲ್ಲಿ ಕೋಪವನ್ನು ತೀರಿಸಿಕೊಳ್ಳುವರು; ನಿನ್ನ ಮೂಗು, ಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವುರು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.26ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು.27ಹೀಗೆ ನಾನು ನಿನ್ನ ದುಷ್ಕರ್ಮವನ್ನು, ನೀನು ಐಗುಪ್ತದಲ್ಲಿ ಇದ್ದಂದಿನಿಂದ ನಡೆದು ಬಂದ ನಿನ್ನ ವ್ಯಭಿಚಾರವನ್ನೂ ನಿನ್ನಿಂದ ತೊಲಗಿಸುವೆನು; ಆ ಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.>>28ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ, ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು,29ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು, ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬರಿದುಮಾಡಿ ಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ವ್ಯಭಿಚಾರವು, ಹೌದು, ನಿನ್ನ ದುಷ್ಕರ್ಮವು ಮತ್ತು ವ್ಯಭಿಚಾರವೂ ಬಯಲಿಗೆ ಬರುವುದು.30<<ಈ ವಿಪತ್ತುಗಳು ನಿನಗೆ ಸಂಭವಿಸುವುದಕ್ಕೆ, ನೀನು ಜನಾಂಗಗಳನ್ನು ಮೋಹಿಸಿ, ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಮಾಡಿಕೊಂಡದ್ದೇ ಕಾರಣ.31ನೀನು, ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡಿದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.>>
32ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಉದ್ದವೂ, ಅಗಲವೂ, ಬಹಳ ತುಂಬುವ,ನಿನ್ನ ಅಕ್ಕನ ಪಾತ್ರೆಯಲ್ಲಿ ನೀನು ಕುಡಿದು, ಹಾಸ್ಯಕ್ಕೂ, ಕುಚೋದ್ಯಕ್ಕೂ ಗುರಿಯಾಗುವಿ.
33ಸಮಾರ್ಯಳೆಂಬ ನಿನ್ನ ಅಕ್ಕನು ಕುಡಿದ ಪಾತ್ರೆಯಿಂದಲೇ ವಿಸ್ಮಯವೂ, ನಾಶವೂ ಆಗುವುದು.ನೀನು ಅಮಲಿನಿಂದಲೂ, ದುಃಖದಿಂದಲೂ ತುಂಬಿರುವೆ.
34<<ನೀನು ಅದರಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿಯುವಿ. ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ ಮತ್ತು ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ. ಏಕೆಂದರೆ ನಾನೇ ಅದನ್ನು ಹೇಳಿದ್ದೇನೆ>> ಎಂಬುದು ಕರ್ತನಾದ ಯೆಹೋವನ ನುಡಿ.35ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.>>ಸಹೋದರಿಯರಿಬ್ಬರಿಗೆ ಆದ ಶಿಕ್ಷೆ
36ಯೆಹೋವನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ಒಹೊಲಳಿಗೂ, ಒಹೊಲೀಬಳಿಗೂ ನ್ಯಾಯತೀರುಸುವೆಯೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು.37ಅವರು ವ್ಯಭಿಚಾರ ಮಾಡಿದ್ದಾರೆ, ಅವರ ಕೈ ರಕ್ತಮಯವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರಮಾಡಿದ್ದಾರೆ, ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬದಲಾಗಿ ಆಹುತಿಕೊಟ್ಟಿದ್ದಾರೆ.38ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಪವಿತ್ರ ಮಾಡಿದ್ದಾರೆ.39ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರ ಮಾಡಿದರು; ಇಗೋ, ನನ್ನ ಮಂದಿರದ ಒಳಗೆ ಇದನ್ನು ನಡೆಸಿದ್ದಾರೆ.40<<ದೂತನನ್ನು ಕಳುಹಿಸಿ, ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; ಎಲೈ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿ, ನಿನ್ನನ್ನು ಆಭರಣಗಳಿಂದ ಶೃಂಗರಿಸಿಕೊಂಡೆ.41ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ.42<<ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನ ಶಬ್ದವು ಇತ್ತು. ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಅವರು ನಾಡಿನ ಜನರೊಂದಿಗೆ ಸೇರಿ, ನಿನ್ನ ಕೈಗೆ ಕಡಗವನ್ನು ತೊಡಿಸಿ, ತಲೆಗೆ ಸುಂದರ ಕಿರೀಟವನ್ನಿಟ್ಟರು.43ಆಗ ನಾನು, <ಆಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ, ಅವಳು ಇವರೊಂದಿಗೆ ವ್ಯಭಿಚಾರ ಮಾಡುತ್ತಾರಲ್ಲಾ> ಅಂದುಕೊಂಡೆನು.44ವ್ಯಭಿಚಾರಿಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟ ಹೆಂಗಸರಾದ ಒಹೊಲಳನ್ನೂ ಮತ್ತು ಒಹೊಲೀಬಳನ್ನೂ ಸೇರಿದರು.45ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.>>46ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಈ ಹೆಂಗಸರ ವಿರುದ್ಧವಾಗಿ ಸಭೆಯನ್ನು ಸೇರಿಸಿ, ಇವರನ್ನು ಸೂರೆಗೆ ಸಿಕ್ಕಿಸಿ, ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.47ಸಭೆಯವರು ಇವರ ಮೇಲೆ ಕಲ್ಲೆಸೆದು, ಕತ್ತಿಗಳಿಂದ ಇವರನ್ನು ಸಂಹರಿಸಿ, ಇವರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.48<<ಹೀಗೆ ನಾನು ದೇಶದೊಳಗಿಂದ ದುಷ್ಕರ್ಮವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ದುಷ್ಕರ್ಮವನ್ನು ಅನುಸರಿಸಬಾರದೆಂದು ಬುದ್ಧಿ ಬರುವುದು.49ನಿಮ್ಮ ದುಷ್ಕರ್ಮದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸುವಿರಿ. ನಾನೇ ಕರ್ತನಾದ ಯೆಹೋವನು>> ಎಂದು ತಿಳಿದುಕೊಳ್ಳುವಿರಿ. 24ಕಿಲುಬಿನ ಹಂಡೆಯ ಸಾಮ್ಯ
1ಒಂಭತ್ತನೆಯ ವರ್ಷದ, ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕಿದ್ದಾನೆ.3<<ಈ ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ,<ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;
4ಮಾಂಸದ ತುಂಡುಗಳನ್ನು ಅಂದರೆ ತೊಡೆ, ಹೆಗಲು ಮೊದಲಾದ ಒಳ್ಳೆಯ ತುಂಡುಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು,ಉತ್ತಮವಾದ ಎಲುಬುಗಳನ್ನು ಅದರಲ್ಲಿ ತುಂಬಿಸು.
5ಹಿಂಡಿನಲ್ಲಿ ಶ್ರೇಷ್ಠವಾದದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು;ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಲಿ.> >>
6ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆಹಾ, ರಕ್ತಮಯವಾದ ಪಟ್ಟಣವೇ ನನಗೆ ಧಿಕ್ಕಾರ ಹಂಡೆಯಲ್ಲಿನ ಕಿಲುಬು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ಮಾಂಸವನ್ನು ತುಂಡು ತುಂಡಾಗಿ ತೆಗೆ. ಆಯ್ಕೆಯ ಚೀಟಿಯನ್ನು ಹಾಕಬೇಡ.7<<ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.8ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ, ರೋಷವನ್ನೆಬ್ಬಿಸುವ ಹಾಗೆ, ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಅದನ್ನು ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.>>9ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆಹಾ, ರಕ್ತಾಪರಾಧವುಳ್ಳ ಆ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.10ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸವನ್ನು ಬೇಯಿಸು, ಸಾರು ಮಂದವಾಗಿರಲಿ, ಎಲುಬುಗಳು ಬೆಂದು ಹೋಗಲಿ.11<<ಆ ಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಿನ ಕಲ್ಮಷವು ಕರಗಿ, ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.12ಅದರ ಕಲ್ಮಷವು ನನ್ನಲ್ಲಿ ಕೇವಲ ಪ್ರಯಾಸವನ್ನೂ, ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.13<<ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.>>14ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, <<ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು>> ಇದು ಕರ್ತನಾದ ಯೆಹೋವನ ನುಡಿ.ಯೆಹೆಜ್ಕೇಲನ ಪತ್ನಿ ವಿಯೋಗ
15ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,16<<ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ.17ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.>>18ಹೀಗೆ ಆಜ್ಞೆಯಾಗಲು ನಾನು ಪ್ರಾತಃಕಾಲದಲ್ಲಿ ಜನರೊಂದಿಗೆ ಮಾತನಾಡಿದನು, ಸಾಯಂಕಾಲಕ್ಕೆ ನನ್ನ ಪತ್ನಿಯು ತೀರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ಮಾಡಿದೆನು.19ಆಗ ಜನರು, <<ನೀನು ಹೀಗೆ ಮಾಡುವುದರಿಂದ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ?>> ಎಂದು ನನ್ನನ್ನು ಕೇಳಲು,20ನಾನು ಅವರಿಗೆ ಹೀಗೆ ಹೇಳಿದೆನು, <<ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ.21ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, <ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ22ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ, ಮನುಷ್ಯರ ರೊಟ್ಟಿಯನ್ನು ತಿನ್ನದೆ ಇರುವಿರಿ,23ರುಮಾಲುಗಳು ನಿಮ್ಮ ತಲೆಯ ಮೇಲೆಯೂ, ಕೆರಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರ ಸಂಗಡಲೊಬ್ಬರು ನರಳುವಿರಿ.24ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದಂತೆಯೇ ಎಲ್ಲವನ್ನು ನೀವು ಮಾಡುವಿರಿ; ಇದು ಸಂಭವಿಸುವಾಗ ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವುದು.> >>25<<ನರಪುತ್ರನೇ, ಅವರ ಬಲಾಧಾರವೂ, ಅವರ ನೇತ್ರಾನಂದಕರವಾದ ಆಲಯವನ್ನು, ಅವರು ಆಶಿಸುವುದನ್ನೂ, ಅವರ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಅವರ ಬಲದಿಂದ ತೆಗೆದು ಹಾಕುವ ದಿನದಲ್ಲಿ,26ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದು ನಡೆದ ಸಂಗತಿಯನ್ನು ನಿನಗೆ ತಿಳಿಸುವನು.27ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ. ನಾನೇ ಯೆಹೋವನು>> ಎಂದು ಅವರಿಗೆ ಗೊತ್ತಾಗುವುದು.
25ಅಮ್ಮೋನ್ ವಿರುದ್ಧವಾದ ದೈವೋಕ್ತಿ
1ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ನೀನು ಅಮ್ಮೋನಿಗೆ ವಿರುದ್ಧವಾಗಿ, ಅದರ ವಿಷಯದಲ್ಲಿ ದೈವಸಂಕಲ್ಪವನ್ನು ಪ್ರವಾದಿಸುತ್ತಾ ಅದಕ್ಕೆ ಹೀಗೆ ನುಡಿ,3<ಕರ್ತನಾದ ಯೆಹೋವನ ಮಾತನ್ನು ಕೇಳು> ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದನ್ನು, ಯೆಹೂದ ವಂಶದವರು ಸೆರೆಹೋದದ್ದನ್ನು ನೀನು ನೋಡಿ, <<ಅಹಾ!>> ಎಂದು ಹಿಗ್ಗಿಕೊಂಡೆ.4ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು, ನಿನ್ನ ಹಾಲನ್ನು ಕುಡಿದುಬಿಡುವರು.5ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.> >>6ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.7ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸುಲಿಗೆಗಾಗಿ ಮ್ಲೇಚ್ಛರಿಗೆ ವಶಪಡಿಸಿ, ಜನಾಂಗಗಳೊಳಗಿಂದ ಕಿತ್ತುಬಿಟ್ಟು, ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ, ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.>>ಮೋವಾಬ್ ವಿರುದ್ಧವಾದ ದೈವೋಕ್ತಿ
8ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.9ಆದುದರಿಂದ, ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು, ಅಂದರೆ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾಥಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.10ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು.11ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸಿ ತೀರಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.>>ಎದೋಮ್ ವಿರುದ್ಧವಾದ ದೈವೋಕ್ತಿ
12ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.>>13ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಮತ್ತು ಪಶುಗಳನ್ನೂ ನಿರ್ಮೂಲಮಾಡಿ, ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.14ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು>> ಇದು ಕರ್ತನಾದ ಯೆಹೋವನ ನುಡಿ.ಫಿಲಿಷ್ಟಿಯರ ವಿರುದ್ಧವಾದ ದೈವೋಕ್ತಿ
15ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಫಿಲಿಷ್ಟಿಯರು ಯೆಹೂದಕ್ಕೆ ಪ್ರತಿಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.>>16ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು.17ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆಮುಯ್ಯಿ ತೀರಿಸುವೆನು; ಹೀಗೆ ಪ್ರತಿಕಾರಮಾಡುವುದರಿಂದ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.>>
26ತೂರಿನ ವಿರುದ್ಧವಾದ ದೈವೋಕ್ತಿ
1ಹನ್ನೊಂದನೆಯ ವರ್ಷದ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು>> ಅಂದುಕೊಳ್ಳುವೆನು.3ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರೆಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.4ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೋಟೆ ಕೊತ್ತಲುಗಳನ್ನು ಕೆಡವಿ ಹಾಕುವವು; ನಾನು ಅದರ ಧೂಳನ್ನು ಒರೆಸಿ, ಅದನ್ನು ಬೋಳು ಬಂಡೆಯಂತೆ ಮಾಡುವೆನು.5ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ, <ಅದು ಜನಾಂಗಗಳಿಗೆ ಸೂರೆಯಾಗುವುದು.>6ಬಯಲು ಭೂಮಿಯಲ್ಲಿನ ಅದರ ಕುಮಾರ್ತೆಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವನು>> ಎಂದು ಎಲ್ಲರಿಗೂ ಗೊತ್ತಾಗುವುದು.7ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.8ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ, ದಿಬ್ಬವನ್ನು ಹಾಕುವನು.9ಗುರಾಣಿ ಹಿಡಿದಿರುವವರನ್ನು ಕಳುಹಿಸಿ, ತನ್ನ ಯುದ್ಧ ಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೋಟೆ ಕೊತ್ತಲಗಳನ್ನು ಒಡೆದು ಬಿಡುವನು.10ಅವನ ಲೆಕ್ಕವಿಲ್ಲದ ಕುದುರೆಗಳಿಂದ ಏಳುವ ಧೂಳಿನಿಂದ ನಿನ್ನನ್ನು ಮುಸುಕುವನು; ಒಡಕು ಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.11ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲು ಕಂಬಗಳನ್ನು ಕೆಡವಿ ಹಾಕುವನು.12ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು.13ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು.14ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ>> ಇದು ಕರ್ತನಾದ ಯೆಹೋವನ ನುಡಿ.15ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, <<ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ?16ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.17ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು!18ಈ ನಿನ್ನ ಪತನದ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಇಲ್ಲವಾದದ್ದಕ್ಕೆ ಸಮುದ್ರ ದ್ವೀಪಗಳು ಗಾಬರಿಯಾಗುವವು.>>19ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ನಿನ್ನನ್ನು ಹಾಳು ಊರನ್ನಾಗಿ ಮಾಡಿ, ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಳುಗಿ ಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಬರಮಾಡುವೆನು.20<<ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.21ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ>> ಇದು ಕರ್ತನಾದ ಯೆಹೋವನ ನುಡಿ.
27ತೂರಿನ ವೈಭವವೂ, ನಾಶನವೂ
1ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ನೀನು ತೂರಿನ ವಿಷಯದಲ್ಲಿ ಶೋಕ ಗೀತೆಯನ್ನೆತ್ತು, ಅದಕ್ಕೆ ಹೀಗೆ ನುಡಿ,3<ಸಮುದ್ರ ದ್ವಾರದಲ್ಲಿ ವಾಸಿಸುತ್ತಾ, ಜನಾಂಗಗಳಿಗಾಗಿ ಅನೇಕ ದ್ವೀಪಗಳೊಂದಿಗೆ ವ್ಯಾಪಾರ ಮಾಡುವ ನಗರಿಯೇ!> ಕರ್ತನಾದ ಯೆಹೋವನು ಇಂತೆನ್ನುತ್ತಾನೆ,ತೂರೇ, <ನಾನು ಪರಿಪೂರ್ಣ ಸುಂದರಿಯಾಗಿದ್ದೇನೆ> ಎಂದು ನೀನು ಅಂದುಕೊಂಡಿದ್ದೀ!
4ನಿನ್ನ ನೆಲೆಯು ಸಮುದ್ರದ ಮಧ್ಯವೇ; ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು.
5ಸೆನೀರಿನ ತುರಾಯಿ ಮರದಿಂದ ನಿನ್ನ ಹಲಗೆಗಳನ್ನು ಮಾಡುವುದಕ್ಕೆಮತ್ತು ನಿನ್ನ ಸ್ತಂಭವನ್ನು ರಚಿಸುವುದಕ್ಕೆ ಲೆಬನೋನಿನಿಂದ ದೇವದಾರು ಮರವನ್ನು ತಂದರು.
6ನಿನ್ನ ಹುಟ್ಟುಗೋಲನ್ನು ಬಾಷಾನಿನ ಓಕ್ ಮರದಿಂದ ಮಾಡಿ,ಕಿತ್ತೀಮ್ ದ್ವೀಪದ ಹಲಿಗೆಯಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಕೆತ್ತಿದ್ದಾರೆ.
7ನಿನ್ನ ಹಾಯಿಯು ನಿನಗೆ ಧ್ವಜವಾಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರು ಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟನ್ನು ಎಲೀಷ ಕರಾವಳಿಯ ಧೂಮ್ರ ರಕ್ತವರ್ಣಗಳಿಂದ ಚಿತ್ರಿತವಾಗಿದೆ. 8ಚೀದೋನಿನ, ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವರು;ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು.
9ನಿನ್ನಲ್ಲಿ ಸೇರಿಕೊಂಡಿದ್ದ ಗೇಬಾಲಿನ ಹಿರಿಯರೂ ಮತ್ತು ಜಾಣರೂ ನಿನ್ನ ಬಿರುಕುಗಳನ್ನು ಮುಚ್ಚಿದ್ದಾರೆ.ಸಮುದ್ರದ ಸಕಲ ನಾವೆಗಳ ಮತ್ತು ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು, ನಿನಗೆ ಸರಕುಗಳನ್ನು ತಂದೊಪ್ಪಿಸಿದ್ದಾರೆ.
10ಪಾರಸಿಯರೂ, ಲೂದ್ಯರೂ, ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು.ಗುರಾಣಿಯನ್ನು ಮತ್ತು ಶಿರಸ್ತ್ರಾಣವನ್ನು ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು!
11ಅರ್ವಾದಿನವರೂ ಮತ್ತು ಹೆಲೆಕರು ನಿನ್ನ ಸೈನಿಕರ ಸಂಗಡ ನಿನ್ನ ಗೋಡೆಗಳ ಸುತ್ತಲೂ ನಿಂತಿದ್ದರು. ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ಎಲ್ಲರೂ ತಮ್ಮ ಗುರಾಣಿಗಳನ್ನು ಸುತ್ತಮುತ್ತಲು ನಿನ್ನ ಗೋಡೆಗಳ ಮೇಲೆ ನೇತುಹಾಕಿ, ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು!12<<ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು.13ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು.14<<ತೋಗರ್ಮ ವಂಶದವರು ಕುದುರೆಗಳಿಂದಲೂ, ಕುದುರೆ ಸವಾರಿಗಳಿಂದಲೂ, ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.15ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತ ಕೊಂಬು ಮತ್ತು, ಕಪ್ಪುಮರಗಳನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು.16<<ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.17<<ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ , ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.18<<ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ, ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನೂ ಹಾಗು ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸುತ್ತಿದ್ದರು.19<<ದಾನಿನವರೂ ಮತ್ತು ಯಾವಾನಿನವರೂ ಊಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸಿದರು.ಕಬ್ಬಿಣ, ಬಜೆ, ಲವಂಗ, ಚಕ್ಕೆ ಇವುಗಳು ನಿನಗೆ ಆಮದಾಗುತ್ತಿದ್ದವು.20ದೇದಾನಿನವರು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿದ್ದರು.21ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು.22<<ಶೆಬದವರೂ ಮತ್ತು ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ, ಎಲ್ಲಾ ಶ್ರೇಷ್ಠವಾದ ಸುಗಂಧದ್ರವ್ಯದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ, ಚಿನ್ನದಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.23ಹಾರಾನ್, ಕನ್ನೆ, ಎದೆನ್ ಸ್ಥಳಗಳವರೂ, ಶೆಬ, ಅಶ್ಶೂರ್ ಕಿಲ್ಮದ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು.24ಅವರು ನಿನ್ನ ವ್ಯಾಪಾರಿಗಳಾಗಿ, ಉತ್ತಮ ಕಸೂತಿಯ ಧೂಮ್ರ ವರ್ಣದ ನಿಲುವಂಗಿ ಮೊದಲಾದ ಸರಕುಗಳನ್ನೂ, ಹಗ್ಗಗಳಿಂದ ಬಲವಾಗಿ ಬಿಗಿದ ವಿಚಿತ್ರ ವಸ್ತ್ರಗಳ ಪೆಟ್ಟಿಗೆಗಳನ್ನೂ ತಂದರು.25 ತಾರ್ಷೀಷಿನ ಹಡಗಿನ ಪ್ರಯಾಣಿಕರು ನಿನ್ನನ್ನು ನಿನ್ನ ಮಾರುಕಟ್ಟೆಯಲ್ಲಿ ಹೊಗಳುವರು.ನೀನು ಸಮುದ್ರ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ.
26ಹುಟ್ಟುಹಾಕುವವರು ನಿನ್ನನ್ನು ಮಹಾ ತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರದ ಮಧ್ಯದಲ್ಲಿ ಒಡೆದುಬಿಟ್ಟಿದೆ.
27ನಿನ್ನ ಆಸ್ತಿಯು, ನಿನ್ನ ವಸ್ತುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಒಡಕುಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸೈನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ ಸಮುದ್ರದೊಳಗೆ ಮುಳುಗಿ ಹೋಗುವರು. 28ನಿನ್ನ ನಾವಿಕರ ಕೂಗಾಟಕ್ಕೆ ಸಮೀಪದ ಪ್ರದೇಶಗಳು ನಡುಗುವುವು.
29ಹುಟ್ಟುಹಾಕುವವರೆಲ್ಲರೂ, ಅಂಬಿಗರೂ,ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದ ಇಳಿದು ನೆಲದ ಮೇಲೆ ನಿಂತುಕೊಳ್ಳುವರು.
30ನಿನ್ನ ನಿಮಿತ್ತ ದುಃಖದಿಂದ ಅರಚಿ, ತಲೆಗೆ ಧೂಳೆರಚಿಕೊಂಡು,ಬೂದಿಯಲ್ಲಿ ಬಿದ್ದು ಹೊರಳಾಡಿ,
31ನಿನಗಾಗಿ ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು,ಮನೋವ್ಯಥೆಯಿಂದ ಗೋಳಾಡಿ, ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
32ಅವರು ರೋದನ ಮಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು,<ಸಮುದ್ರದ ನಡುವೆ ಹಾಳಾಗಿರುವ ತೂರಿಗೆ ಯಾವ ಪಟ್ಟಣ ಸಮಾನವಾಗಿದೆ?>
33ನಿನ್ನ ಸರಕುಗಳು ಸಮುದ್ರಗಳನ್ನು ದಾಟಿ ಹರಡಿಕೊಂಡವು, ಅವುಗಳಿಂದ ಅನೇಕ ಜನಾಂಗಗಳನ್ನು ತೃಪ್ತಿಪಡಿಸಿದಿ;ನಿನ್ನ ಅಪಾರವಾದ ಐಶ್ವರ್ಯದಿಂದಲೂ, ವ್ಯಾಪಾರದ ವಸ್ತುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದಿ.
34ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ,ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧಜಲದಲ್ಲಿ ಮುಳುಗಿ ಹೋದರು.
35ಕರಾವಳಿಯ ಸಮಸ್ತ ನಿವಾಸಿಗಳು ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ;ಅರಸರು ಭಯಪಟ್ಟಿದ್ದಾರೆ. ಅರಸರು ನಡುಗಿ ಭೀತಿಗೊಂಡಿದ್ದಾರೆ.
36ಜನಾಂಗಗಳ ವರ್ತಕರು ನಿನ್ನನ್ನು ನೋಡಿ, ಸಿಳ್ಳು ಹಾಕುತ್ತಾರೆ;ನೀನು ಸಂಪೂರ್ಣ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.>>
28ತೂರಿನ ಅರಸನ ಅಹಂಭಾವವನ್ನು ಖಂಡಿಸಿದ್ದು
1ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು> ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.3<<ಇಗೋ, ನೀನು ದಾನಿಯೇಲನಿಗಿಂತಲೂ ಜ್ಞಾನಿಯಾಗಿರುವೆಯಾ; ನಿನಗೆ ರಹಸ್ಯವಾದುದು ಯಾವುದೇ ಇದ್ದರು ನಿನಗೆ ಮರೆಯಾಗಿರುವುದಿಲ್ಲ?4ನಿನ್ನ ಜ್ಞಾನದಿಂದಲೂ, ನಿನ್ನ ವಿವೇಕದಿಂದಲೂ ನೀನು ಐಶ್ವರ್ಯವನ್ನು ಹೆಚ್ಚಿಸಿಕೊಂಡಿರುವೆ. ನಿನ್ನ ಭಂಡಾರಗಳಲ್ಲಿ ಬೆಳ್ಳಿಯನ್ನೂ, ಬಂಗಾರವನ್ನು ತುಂಬಿಸಿಕೊಂಡಿದ್ದೀ.5ನೀನು ನಿನ್ನ ಅಧಿಕ ಜ್ಞಾನದಿಂದ ವ್ಯಾಪಾರದಲ್ಲಿ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಕೊಂಡಿದೆ.>>6ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ. <<ನೀನು ನಿನ್ನನ್ನು ದೇವರಿಗೆ ಸಮಾನವಾಗಿಸಿಕೊಂಡಿರುವೆ.7ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.8<<ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರದ ಮಧ್ಯದಲ್ಲಿ ಹತರಾದವರ ಹಾಗೆ ನೀನು ಸಾಯುವಿ.9ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ.10ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ಏಕೆಂದರೆ ನಾನೇ ಇದನ್ನು ನುಡಿದಿದ್ದೇನೆ>> ಎಂದು ಕರ್ತನಾದ ಯೆಹೋವನು ಹೇಳಿದ್ದಾನೆ.11ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,12<<ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕ ಗೀತೆಯನ್ನು ಹಾಡು, ಅವನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನೀನು ಸರ್ವಸುಲಕ್ಷಣ ಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರಿ.13ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.14<< <ನೀನು ರೆಕ್ಕೆತೆರೆದು ನೆರಳು ನೀಡುವ ಕೆರೂಬಿಯಾಗಿದ್ದೆ; ನಾನು ನಿನ್ನನ್ನು ದೇವರ ಪರಿಶುದ್ಧ ಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಅಮೂಲ್ಯ ರತ್ನಗಳ ಕೆಂಡದ ಮಧ್ಯದಲ್ಲಿ ವಿಹಾರ ಮಾಡುತ್ತಿದ್ದೆ.15ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.16<< <ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದೆ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಅಪವಿತ್ರನೆಂದು ತಳ್ಳಿಬಿಟ್ಟೆನು; ಹೌದು, ನೆರಳು ನೀಡುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.17<< <ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.18ನಿನ್ನ ಅಪಾರವಾದ ಅಪರಾಧಗಳಿಂದಲೂ, ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ; ಆದುದರಿಂದ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿ ಮಾಡಿಬಿಟ್ಟೆನು.19ಜನಾಂಗಗಳಲ್ಲಿ ನಿನ್ನನ್ನು ಬಲ್ಲವರೆಲ್ಲರೂ ನಿನ್ನ ಗತಿಗೆ ಬೆಚ್ಚಿ ಬೆರಗಾಗುವರು; ನೀನು ಸಂಪೂರ್ಣ ನಾಶವಾಗಿ ಇನ್ನೆಂದಿಗೂ ಇಲ್ಲದಂತಾಗುವೆ.> >>ಚೀದೋನಿನ ಬಗ್ಗೆ ದೈವೋಕ್ತಿ
20ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,21<<ನರಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.22ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು> ಎಂದು ಎಲ್ಲರಿಗೂ ಗೊತ್ತಾಗುವುದು.23<ನಾನು ಅದರಲ್ಲಿ ವ್ಯಾಧಿಯನ್ನೂ, ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟು ಮಾಡುವೆನು, ಖಡ್ಗವು ಸುತ್ತುಮುತ್ತಲೂ ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು> ಎಂದು ಅವರಿಗೆ ತಿಳಿದು ಬರುವುದು.24<<ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನು ಮೇಲೆ ಇರುವುದಿಲ್ಲ; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನು ಆಗುವುದಿಲ್ಲ; ನಾನೇ ಕರ್ತನಾದ ಯೆಹೋವನು>> ಎಂದು ಅವರಿಗೆ ತಿಳಿಯುವುದು.ಇಸ್ರಾಯೇಲಿನ ಮುಂದಿನ ಸುಸ್ಥಿತಿ
25ಕರ್ತನಾದ ಯೆಹೋವನು ಇಂತೆನ್ನುತ್ತಾನೆ, << <ಜನಾಂಗಗಳಲ್ಲಿ ಚದುರಿ ಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.26ಅಲ್ಲಿ ನಿರ್ಭಯವಾಗಿ ವಾಸಿಸುವರು, ಮನೆಗಳನ್ನು ಕಟ್ಟಿಕೊಂಡು, ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಆಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ನಿರ್ಭಯವಾಗಿ ವಾಸಿಸುವರು. ಆಗ ಯೆಹೋವನಾದ ನಾನೇ ಅವರ ದೇವರು ಎಂದು ಅವರಿಗೆ ನಿಶ್ಚಯವಾಗುವುದು.> >>
29ಐಗುಪ್ತದ ವಿಷಯವಾದ ದೈವೋಕ್ತಿಗಳು
1ಹತ್ತನೆಯ ವರ್ಷದ, ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನ ವಿಷಯದಲ್ಲಿಯೂ, ಐಗುಪ್ತ್ಯರೆಲ್ಲರ ವಿಷಯದಲ್ಲಿಯೂ ಹೀಗೆ ಪ್ರವಾದಿಸು.3<<ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ,ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, <ಈ ನದಿ ನನ್ನದೇ,
ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ> ಎಂದು ಹೇಳಿಕೊಳ್ಳುವ
ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.
4<<ನಾನು ನಿನ್ನ ದವಡೆಗಳಿಗೆ ಗಾಳ ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ, ಆ ಮೀನುಗಳ ಸಹಿತ ನಿನ್ನನ್ನು ನೈಲ್ ನದಿಯ ಮಧ್ಯದೊಳಗಿಂದ ಹೊರಗೆ ಎಳೆದು ಹಾಕುವೆನು.
5ನಿನ್ನನ್ನೂ, ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಅರಣ್ಯದ ಪಾಲು ಮಾಡುವೆನು;ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಹೂಣಿಡುವುದೂ ಇಲ್ಲ, ಸೇರಿಸುವುದೂ ಇಲ್ಲ;
ನಾನು ನಿನ್ನನ್ನು ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.
6ಆಗ ಐಗುಪ್ತದ ಸಕಲ ನಿವಾಸಿಗಳು ನಾನೇ ಯೆಹೋವನು ಎಂದು ತಿಳಿಯವರು.ಅವರು ಇಸ್ರಾಯೇಲ್ ವಂಶದವರಿಗೆ ದಂಟಿನ ಊರುಗೋಲಾಗಿದ್ದರು.
7ಇಸ್ರಾಯೇಲರು ನಿನ್ನ ಮೇಲೆ ಕೈಯಿಡಲು, ನೀನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದೆ;ಅವರು ನಿನ್ನ ಮೇಲೆ ಆತುಕೊಳ್ಳುವಾಗ, ನೀನು ಅವರನ್ನು ಒಡೆದು, ಅವರ ಕಾಲುಗಳಿಗೆ ಮತ್ತು ನಡುವಿಗೆ ನಡುಕವನ್ನು ಉಂಟುಮಾಡಿದೆ.
8<<ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ, ಜನರನ್ನೂ, ಪಶುಗಳನ್ನೂ ನಿನ್ನೊಳಗಿಂದ ನಿರ್ಮೂಲ ಮಾಡುವೆನು.9ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಐಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು> ಎಂದು ಅವರಿಗೆ ಗೊತ್ತಾಗುವುದು.10<ಇಗೋ, ನಾನು ನಿನಗೂ, ನಿನ್ನ ನದಿಗೂ ವಿರುದ್ಧವಾಗಿ ಐಗುಪ್ತ ದೇಶವನ್ನು ಮಿಗ್ದೋಲಿನಿಂದ ಸೆವೇನಿಯ ತನಕ, ಹೌದು, ಕೂಷಿನ ಮೇರೆಯವರೆಗೂ ತೀರಾ ಹಾಳು ಮಾಡುವೆನು.11<< <ಯಾವ ಮನುಷ್ಯನ ಪಾದವೂ ಅದರಲ್ಲಿ ಹಾದುಹೋಗುವುದಿಲ್ಲ; ಯಾವ ಪಶುವಿನ ಪಾದವೂ ಅದರಲ್ಲಿ ದಾಟಿಹೋಗುವುದಿಲ್ಲ; ನಲ್ವತ್ತು ವರ್ಷ ನಿರ್ಜನವಾಗಿರುವುದು.12ಹಾಳು ಬಿದ್ದಿರುವ ದೇಶಗಳ ಮಧ್ಯದಲ್ಲಿ ಐಗುಪ್ತ ದೇಶವನ್ನೂ ಹಾಳುಮಾಡುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲ್ವತ್ತು ವರ್ಷ ಹಾಗೆಯೇ ಇರುವುದು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ, ದೇಶದೇಶಗಳಲ್ಲಿ ಚದುರಿಸುವೆನು.> >>13<<ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನಲ್ವತ್ತು ವರ್ಷಗಳ ಮೇಲೆ ನಾನು ಐಗುಪ್ತ್ಯರನ್ನು ಅವರು ಚದುರಿ ಹೋಗಿದ್ದ ಜನಾಂಗಗಳೊಳಗಿಂದ ಅವರನ್ನು ಒಟ್ಟುಗೂಡಿಸುವೆನು.14ಐಗುಪ್ತದ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮ ಭೂಮಿಯಾದ ಪತ್ರೋಸ್ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ಕನಿಷ್ಠ ರಾಜ್ಯದವರಾಗಿರುವರು.15ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಸ್ಥಿತಿಗೆ ತರುವೆನು.16ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲರಲ್ಲಿ ಐಗುಪ್ತದಿಂದ ಇನ್ನು ಹುಟ್ಟುವುದಿಲ್ಲ. ನಾನೇ ಯೆಹೋವನು> >> ಎಂದು ಅವರಿಗೆ ತಿಳಿಯುವುದು.ನೆಬೂಕದ್ನೆಚ್ಚರನು ಐಗುಪ್ತವನ್ನು ಜಯಿಸಿದ್ದು
17ಇಪ್ಪತ್ತೇಳನೆಯ ವರ್ಷದ, ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,18<<ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಅತಿ ಕ್ರೂರವಾಗಿ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಸುಲಿದು ಹೋಗಿದೆ. ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ, ಅವನ ಸೈನಿಕರಿಗಾಗಲಿ ತೂರಿನಿಂದ ಪ್ರತಿಫಲವೇನೂ ಸಿಕ್ಕಲಿಲ್ಲ.>>19ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು.20ಅವನು ಸೈನ್ಯ ಸಮೇತನಾಗಿ ನನಗೋಸ್ಕರ ಸೇವೆ ಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಐಗುಪ್ತ ದೇಶವನ್ನು ಅವನಿಗೆ ಕೊಟ್ಟಿದ್ದೇನೆ>> ಇದು ಕರ್ತನಾದ ಯೆಹೋವನ ನುಡಿ.21<<ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.>> 30ಐಗುಪ್ತಕ್ಕಾಗುವ ದಂಡನೆ
1ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ನೀನು ಈ ಪ್ರವಾದನೆಯನ್ನು ಹೇಳು,<ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅರಚಿಕೊಳ್ಳಿರಿ! ಅಯ್ಯೋ ದುರ್ದಿನವೇ!
3ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು. 4ಖಡ್ಗವು ಐಗುಪ್ತದ ಮೇಲೆ ಬೀಳುವುದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವುದು;ಐಗುಪ್ತದ ಜನಸಮೂಹವು ಒಯ್ಯಲ್ಪಡುವುದು, ಅದರ ಅಸ್ತಿವಾರವು ಮುರಿದು ಹಾಳಾಗುವುದು.
5<< <ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.> >>6ಯೆಹೋವನು ಇಂತೆನ್ನುತ್ತಾನೆ,<<ಐಗುಪ್ತಕ್ಕೆ ಆಧಾರವಾದವರು ಬೀಳುವರು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು;
ಅಲ್ಲಿನ ಜನರು ಮಿಗ್ದೋಲಿನಿಂದ ಸೆವೇನೆಯವರೆಗೆ ಖಡ್ಗದಿಂದ ಹತರಾಗುವರು>> ಇದು ಕರ್ತನಾದ ಯೆಹೋವನ ನುಡಿ.
7ಹಾಳಾಗಿರುವ ದೇಶಗಳೊಳಗೆ ಆ ದೇಶವೂ ಹಾಳಾಗಿರುವುದು, ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳೂ ಪಾಳು ಬಿದ್ದಿರುವವು.8<< <ನಾನು ಐಗುಪ್ತಕ್ಕೆ ಬೆಂಕಿ ಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು> ಎಂದು ಅವರಿಗೆ ಗೊತ್ತಾಗುವುದು.9<ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಯರಿಗೂ ಸಂಕಟವು ಉಂಟಾಗುವುದು; ಇಗೋ, ಆ ದಿನ ಬಂತು!> >>10ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಐಗುಪ್ತದ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.11ಆ ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.12ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.>>13ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.14ನಾನು ಪತ್ರೋಸನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಡುವೆನು. ನೋಪುರವನ್ನು ದಂಡಿಸಿ,15<<ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನೋಪುರದ ನಿವಾಸಿಗಳನ್ನೆಲ್ಲಾ ಕತ್ತರಿಸಿ ಬಿಡುವೆನು.16ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.17<<ಓನಿನ ಮತ್ತು ಪೀಬೆಸೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.18ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.19ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು>> ಎಂದು ಅವರಿಗೆ ಗೊತ್ತಾಗುವುದು.ಐಗುಪ್ತದ ಅರಸನು ಸೋಲಿಸಲ್ಪಡುವನು
20ಹನ್ನೊಂದನೆಯ ವರ್ಷದ, ಮೊದಲನೆಯ ತಿಂಗಳಿನ ಏಳನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,21<<ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ, ಅದನ್ನು ಬಿಗಿಸಲಿಲ್ಲ.>>22ಆದುದರಿಂದ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧವಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವುದನ್ನೂ, ಮುರಿದದ್ದನ್ನೂ ತೀರಾ ಮುರಿದು ಬಿಟ್ಟು, ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು.23<<ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವೆನು.24ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು, ಗಾಯದಿಂದ ಪ್ರಾಣ ಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.25ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವವು; ನಾನು ನನ್ನ ಖಡ್ಗವನ್ನು ಬಾಬೆಲಿನ ಅರಸನಿಗೆ ಕೊಡಲು ಅವನು ಅದನ್ನು ಐಗುಪ್ತ ದೇಶದ ಮೇಲೆ ಎತ್ತುವನು. ಆಗ ನಾನೇ ಯೆಹೋವನು>> ಎಂದು ಎಲ್ಲರಿಗೂ ಗೊತ್ತಾಗುವುದು.26<<ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ ದೇಶದೇಶಗಳಿಗೆ ಚದುರಿಸಿ ಬಿಡುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿದು ಬರುವುದು.>>
31ಐಗುಪ್ತದೊಡೆಯನೆಂಬ ದೊಡ್ಡ ಮರದ ಧ್ವಂಸವು
1ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನಿಗೂ ಮತ್ತು ಅವನ ಅಸಂಖ್ಯಾತವಾದ ಪ್ರಜೆಗೂ ಹೀಗೆ ನುಡಿ,ನಿನ್ನ ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನರು ಯಾರು?
3ಆಹಾ, ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ; ಅದರ ನೆರಳು ದಟ್ಟವಾಗಿದೆ, ಅದರ ಎತ್ತರವು ಬಹಳ,ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.
4ಅದನ್ನು ಜಲಪ್ರವಾಹಗಳು ಬೆಳೆಯಿಸಿದವು, ಮಹಾನದಿಯು ವೃದ್ಧಿಗೊಳಿಸಿತು, ನದಿಗಳು ಅಲ್ಲಿನ ಉದ್ಯಾನವನ್ನು ಸುತ್ತಿಕೊಂಡಿದ್ದವು,ಭೂಮಿಯ ಎಲ್ಲಾ ಮರಗಳಿಗೂ ನದಿಯು ತನ್ನ ಕಾಲುವೆಗಳನ್ನು ನೀಡಿತ್ತು.
5ಆದುದರಿಂದ ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಎತ್ತರವಾಗಿತ್ತು;ಅದರ ಕೊಂಬೆಗಳು ಹಬ್ಬಿದ್ದುದರಿಂದ ಮತ್ತು ಹೆಚ್ಚಿನ ನೀರಾವರಿಯಿದ್ದ ಕಾರಣ ಅದರ ಕೊಂಬೆಗಳು ಅಧಿಕವಾದವು. ಕೊಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.
6ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು;ಸಮಸ್ತ ಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳಿಗೆ ಜನ್ಮ ಕೊಟ್ಟವು. ಮಹಾಜನಾಂಗಗಳೆಲ್ಲಾ ಅದರ ನೆರಳಿನಲ್ಲಿ ವಾಸಮಾಡಿದವು.
7ಹೀಗೆ ಅದು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ನೀಳವಾದ ಕೊಂಬೆಗಳಿಂದ ಕಂಗೊಳಿಸುತ್ತಿತ್ತು. ಏಕೆಂದರೆ ಅದರ ಬೇರು ಸಾಕಷ್ಟು ನೀರಿನ ಆಸರೆ ಪಡೆದಿತ್ತು. 8ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮರೆಮಾಡಲಿಲ್ಲ;ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ; ಆಲದ ಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ;
ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.
9ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು;ದೇವರ ಉದ್ಯಾನವಾದ ಏದೆನಿನ ಸಕಲ ವೃಕ್ಷಗಳೂ ಅದರ ಮೇಲೆ ಅಸೂಯೆಪಡುತ್ತಿದ್ದವು.>>
10ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು, ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾದ ವಿಷಯವಾಗಿ ಉಬ್ಬಿಕೊಂಡಿತ್ತು.11ಆದುದರಿಂದ ನಾನು ಅದನ್ನು ಜನಾಂಗಗಳಲ್ಲಿ ಮಹಾ ಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸುತ್ತಾನೆ. ನಾನು ಅದರ ದುಷ್ಟತ್ವದ ನಿಮಿತ್ತ ತಳ್ಳಿಹಾಕಿದ್ದೇನೆ.12<<ಜನಾಂಗಗಳಲ್ಲಿ ಭಯಂಕರವಾದ ಅನ್ಯರು ಅದನ್ನು ಕಡಿದುಹಾಕಿ ಬಿಟ್ಟಿದ್ದಾರೆ. ಅದರ ರೆಂಬೆಗಳು ಗುಡ್ಡಗಳಲ್ಲಿಯೂ, ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ಹಳ್ಳಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಟ್ಟಿದೆ.13ಅದರ ಬುಡದ ಮೇಲೆ ಎಲ್ಲಾ ಆಕಾಶದ ಪಕ್ಷಿಗಳು ಕುಳಿತುಕೊಳ್ಳುವವು;ಅದರ ಕೊಂಬೆಗಳಲ್ಲಿ ಸಮಸ್ತ ಭೂಜಂತುಗಳು ಇರುವವು.
14<<ನೀರಾವರಿಯ ಯಾವ ಮರಗಳೂ ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು, ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ, ನೀರನ್ನು ಹೀರುತ್ತಲೇ ಇರುವ ದೊಡ್ಡದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು. ಅವೆಲ್ಲಾ ಮರಣದ ಪಾಲಾಗುವುವು, ಅಧೋಲೋಕವೇ ಅವುಗಳಿಗೆ ಗತಿಯಾಗುವುದು; ಪಾತಾಳಕ್ಕೆ ಇಳಿದು ಹೋದ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.>>15ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆ ವೃಕ್ಷವು ಪಾತಾಳಕ್ಕೆ ಇಳಿದು ಹೋದ ದಿನದಲ್ಲಿ ನಾನು ದುಃಖವನ್ನು ಹುಟ್ಟಿಸುವೆನು. ಅದರ ವಿಯೋಗಕ್ಕಾಗಿ ನಾನು ಮಹಾ ನದಿಯನ್ನು ಮರೆಮಾಡಿ, ನದಿಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಕುಗ್ಗಿಹೋದವು.16ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.17ಇದಲ್ಲದೆ ಅದಕ್ಕೆ ತೋಳಿನ ಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು, ಖಡ್ಗದಿಂದ ಹತರಾದವರ ಜೊತೆಗೆ ಸೇರಿದರು.18<<ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.>> 32ಫರೋಹನಿಗಾಗಿ ಶೋಕ ಗೀತೆ
1(ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, <<ನರಪುತ್ರನೇ, ನೀನು ಐಗುಪ್ತದ2ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ,<ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ.
ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.> >>
3ಕರ್ತನಾದ ಯೆಹೋವನು ಇಂತೆನ್ನುತ್ತಾನೆ,<<ಗುಂಪಾಗಿ ಕೂಡಿದ ಬಹು ಜನಾಂಗಗಳವರ ಮೇಲೆ ನಾನು ನನ್ನ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ಆ ಬಲೆಯಿಂದ ಮೇಲಕ್ಕೆ ಎಳೆಯುವರು.
4ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು;ನಿನ್ನನ್ನು ಬಯಲಿನಲ್ಲಿ ಎಸೆದು ಆಕಾಶದ ಪಕ್ಷಿಗಳೆಲ್ಲಾ ನಿನ್ನ ಮೇಲೆ ಎರಗುವಂತೆ ಮಾಡಿ, ಸಮಸ್ತ ಭೂಜಂತುಗಳನ್ನು ನಿನ್ನಿಂದ ತೃಪ್ತಿಗೊಳಿಸುವೆನು.
5ನಿನ್ನ ಮಾಂಸವನ್ನು ಗುಡ್ಡಗಳ ಮೇಲೆ ಹಾಕಿ, ಆ ನಿನ್ನ ಕಣಿವೆಗಳನ್ನು ಹೆಣಗಳ ರಾಶಿಯಿಂದ ತುಂಬಿಸುವೆನು.
6ನಿನ್ನ ರಕ್ತಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು;ಹಳ್ಳಗಳು ನಿನ್ನ ರಕ್ತದಿಂದ ತುಂಬುವವು.
7ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ,ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.
8ನಿನ್ನ ಮೇಲೆ ಆಕಾಶದಲ್ಲಿ ಮಿನುಗುವ ಸಕಲ ಜ್ಯೋತಿಗಳನ್ನೂ ನಾನು ಮಸುಕುಮಾಡಿ,ನಿನ್ನ ದೇಶವನ್ನು ಕತ್ತಲು ಮಾಡುವೆನು>> ಇದು ಕರ್ತನಾದ ಯೆಹೋವನ ನುಡಿ.
9<<ನಾನು ನಿನ್ನ ನಾಶದ ಸುದ್ದಿಯನ್ನು, ಜನಾಂಗಗಳಲ್ಲಿ ನಿನಗೆ ತಿಳಿಯದ ದೇಶಗಳಿಗೂ ಮುಟ್ಟಿಸುವಾಗ, ಅವರ ಮನಸ್ಸಿನಲ್ಲಿ ಗಲಿಬಿಲಿಯನ್ನು ಎಬ್ಬಿಸುವೆನು.10ಹೌದು, ಅನೇಕ ಜನಾಂಗಗಳು ನಿನ್ನ ವಿಷಯದಲ್ಲಿ ಬೆಚ್ಚಿಬೆರಗಾಗುವಂತೆ ಮಾಡುವೆನು, ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ, ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಸೋಲಿನ ದಿನದಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣದ ಬಗ್ಗೆ ಕ್ಷಣಕ್ಷಣವೂ ನಡುಗುವನು.>>11ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಬಾಬೆಲಿನ ಅರಸನ ಖಡ್ಗವು ನಿನ್ನ ಮೇಲೆ ಬೀಳುವುದು.12ನಾನು ನಿನ್ನ ಪ್ರಜೆಯನ್ನು ಅತಿಭಯಂಕರ ಜನಾಂಗದವರಾದ ಬಲಿಷ್ಠರ ಕತ್ತಿಗಳಿಂದ ಸಂಹರಿಸುವೆನು.ಅವರು ಐಗುಪ್ತದ ಮಹತ್ತನ್ನು ನಾಶ ಮಾಡುವರು.
ಅದರ ಜನ ಸಮೂಹವೆಲ್ಲಾ ನಿರ್ನಾಮವಾಗುವುದು.
13ನಾನು ಬಹು ಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು;ಇನ್ನು ಮೇಲೆ ಯಾವ ಮನುಷ್ಯನ ಕಾಲಾಗಲಿ, ಯಾವ ಪಶುವಿನ ಗೊರಸಾಗಲಿ ನೀರಿನಲ್ಲಿ ಹೆಜ್ಜೆಯಿಡುವುದಿಲ್ಲ.
14ಆಗ ಆ ನೀರು ತಿಳಿಯಾಗುವಂತೆಯೂ, ಆ ಪ್ರವಾಹಗಳು ಎಣ್ಣೆಯ ಹಾಗೆ ಹರಿಯುವಂತೆಯೂ ಮಾಡುವೆನು>>ಇದು ಕರ್ತನಾದ ಯೆಹೋವನ ನುಡಿ.
15<<ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ಧ್ವಂಸಗೊಳಿಸಿ,ಆ ದೇಶವನ್ನು ಹಾಳುಮಾಡಿ, ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.
16ಪ್ರಲಾಪಿಸುವವರು ಈ ಶೋಕ ಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಾಡಲಿ; ಐಗುಪ್ತಕ್ಕಾಗಿಯೂ,ಅಲ್ಲಿನ ಬಹು ಪ್ರಜೆಗಳಿಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ>> ಇದು ಕರ್ತನಾದ ಯೆಹೋವನ ನುಡಿ.
ಫರೋಹನ ಪಾತಾಳಪ್ರವೇಶ
17(ಯೆಹೋಯಾಖೀನನು ಸೆರೆಯಾದ) ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,18<<ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ,ಅವರನ್ನೂ ಮತ್ತು ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.
19ಐಗುಪ್ತ್ಯವೇ, ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಹೀನರ ಸಂಗಡ ಮಲಗು.
20ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಐಗುಪ್ತವೂ ಮತ್ತು ಅದರ ಸಮೂಹವೂ ಕತ್ತಿಗೆ ಒಪ್ಪಿಸಲ್ಪಟ್ಟಿದೆ.
21ಪಾತಾಳದೊಳಗಿನ ಬಲಿಷ್ಠ ಶೂರರು ಅದನ್ನೂ, ಅದರ ಸಹಾಯಕರನ್ನೂ ನೋಡಿ,<ಇವರು ಸುನ್ನತಿಯಿಲ್ಲದವರಾಗಿಯೂ, ಖಡ್ಗದಿಂದ ಹತರಾದವರಾಗಿಯೂ ಇಳಿದು ಬಂದಿದ್ದಾರೆ> ಅಂದುಕೊಳ್ಳುವರು.
22ಅಶ್ಶೂರವೂ ಮತ್ತು ಅದರ ಎಲ್ಲಾ ಗುಂಪು ಅಲ್ಲಿರುತ್ತವೆ. ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ;ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು.
23ಅವರ ಗೋರಿಗಳು ಅಧೋಲೋಕದ ಅಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಸಂಹೃತರಾದವರು,ಖಡ್ಗದಿಂದ ಹತರಾದವರು ಗೋರಿಯ ಸುತ್ತಲಿದ್ದಾರೆ;
ಜೀವಲೋಕದಲ್ಲಿ ಹತರಾದವರು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದಾರೆ.
24ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ;ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು;
ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
25ಏಲಾಮು ಮಲಗುವುದಕ್ಕೆ ಹತರಾದ ಅದರ ಸಮೂಹಕ್ಕೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ;ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು,
ಪ್ರೇತಗಳ ಜೊತೆಗೆ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳವು ಏರ್ಪಾಡಾಗಿದೆ.
26ಅಲ್ಲಿ ಮೆಷೆಕ್ ತೂಬಲ್ ಮತ್ತು ಅವುಗಳ ಎಲ್ಲಾ ಸಮೂಹವು ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ;ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದಾರೆ.
27ಸುನ್ನತಿಯಿಲ್ಲದವರಲ್ಲಿ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ,ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು,
ತಮ್ಮ ಎಲಬುಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ?
28ಐಗುಪ್ತ್ಯವೇ, ನೀನು ಸುನ್ನತಿಹೀನರ ಮಧ್ಯದಲ್ಲಿ ನಾಶವಾಗಿ ಖಡ್ಗದಿಂದ ಹತರಾದವರ ನಡುವೆ ಮಲಗುವೆ! 29ಅಲ್ಲಿ ಎದೋಮು, ಅದರ ಅರಸರೂ ಮತ್ತು ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ಸಂಗಡ ಮಲಗಿದ್ದಾರೆ.30<<ಉತ್ತರ ದೇಶದ ಸಕಲ ಪ್ರಭುಗಳೂ ಸಮಸ್ತ ಮತ್ತು ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೊಂಡು ಖಡ್ಗದಿಂದ ಹತರಾದವರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.31ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನ ಹೊಂದುವನು; ಹೌದು, ಫರೋಹನೂ ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು>> ಇದು ಕರ್ತನಾದ ಯೆಹೋವನ ನುಡಿ.32<<ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಮತ್ತು ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ, ಖಡ್ಗದಿಂದ ಹತರಾದವರ ನಡುವೆ ಮಲಗುವರು>> ಎಂಬುದು ಕರ್ತನಾದ ಯೆಹೋವನ ನುಡಿ. 33ಇಸ್ರಾಯೇಲರ ಕಾವಲುಗಾರನಾದ ಯೆಹೆಜ್ಕೇಲನು
1ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, <ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ.3ಅವರು ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ, ಕೊಂಬನ್ನು ಊದಿ ಸ್ವಜನರನ್ನು ಎಚ್ಚರಿಸಲಿ.4ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು.5ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ; ತನ್ನ ಮರಣಕ್ಕೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.6ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.>7<<ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು.8ನಾನು ದುಷ್ಟನಿಗೆ ದುಷ್ಟನೇ, <ನೀನು ಖಂಡಿತವಾಗಿ ಸಾಯುವೆ> ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.9ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ.ಕಾವಲುಗಾರನ ಸಂದೇಶ
10<<ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, <ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.11ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?> >> ಇದು ಕರ್ತನಾದ ಯೆಹೋವನ ನುಡಿ.12ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, <<ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ.13ನಾನು ನೀತಿವಂತನಿಗೆ, <ನೀನು ಖಂಡಿತವಾಗಿ ಬದುಕುವಿ> ಎಂದು ಹೇಳುವಾಗ, ಅವನು ತನ್ನ ನೀತಿಯ ಮೇಲೆ ಭರವಸವಿಟ್ಟು ಪಾಪ ಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.14ನಾನು ದುಷ್ಟನಿಗೆ, <ನೀನು ಖಂಡಿತವಾಗಿ ಸಾಯುವಿ> ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ,15ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು.16ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ನೀತಿನ್ಯಾಯಗಳನ್ನು ನಡೆಸುತ್ತಿದ್ದುದರಿಂದ ನಿಶ್ಚಯವಾಗಿ ಬದುಕುವನು.17ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ.18ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.19ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ಅವುಗಳಿಂದ ಬದುಕುವನು.20ಆದರೆ ನೀವು, <ಯೆಹೋವನ ಮಾರ್ಗವು ಸಮವಲ್ಲ> ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.>>ಯೆರೂಸಲೇಮಿನ ಪತನದ ವಿವರಣೆ
21ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, <<ಪಟ್ಟಣವು ಶತ್ರುವಶವಾಯಿತು>> ಎಂದು ಹೇಳಿದನು.22ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.23ಆಗ ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,24<<ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು <ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?> >> ಎಂದು ಅಂದುಕೊಳ್ಳುತ್ತಿದ್ದಾರೆ.25ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?26ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳಲ್ಲಿ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ಮಾನಭಂಗ ಪಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?>>27ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು.28ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.29ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು>> ಎಂದು ಅವರಿಗೆ ದೃಢವಾಗುವುದು.ಪ್ರವಾದಿಯ ಸಂದೇಶದ ಪರಿಣಾಮ
30ನರಪುತ್ರನೇ, <<ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, <ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ> ಎಂದು ಹೇಳಿಕೊಳ್ಳುತ್ತಿದ್ದಾರೆ.31ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.32ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ, ಮಧುರ ಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.33ನೀನು ಮುಂತಿಳಿಸಿದ್ದು ಸಂಭವಿಸುವಾಗ, ತಮ್ಮ ಮಧ್ಯದಲ್ಲಿ ಪ್ರವಾದಿಯು ಇದ್ದಾನೆ ಎಂದು ಅವರಿಗೆ ತಿಳಿಯುವುದು.>>
34ಇಸ್ರಾಯೇಲೆಂಬ ಮಂದೆಯ ಕುರುಬರ ಸ್ವಾರ್ಥತೆ
1ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ?3ನೀವು ಕೊಬ್ಬಿನ ಮಾಂಸವನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಕೊಬ್ಬಿದ ಕುರಿಗಳನ್ನು ಕೊಲ್ಲುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.4ನೀವು ದುರ್ಬಲವಾದವುಗಳನ್ನು ಬಲಗೊಳಿಸುವುದಿಲ್ಲ, ರೋಗದವುಗಳನ್ನು ಸ್ವಸ್ಥಮಾಡುವುದಿಲ್ಲ, ಮುರಿದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.5ಕುರುಬರು ಇಲ್ಲವಾದುದರಿಂದ ಅವು ಚದುರಿ ಹೋದವು; ಚದುರಿ ಹೋಗಿ, ಕಾಡಿನ ಸಕಲ ಮೃಗಗಳಿಗೆ ತುತ್ತಾದವು.6ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.7<< <ಆದುದರಿಂದ ಕುರುಬರೇ, ಯೆಹೋವನ ಮಾತನ್ನು ಕೇಳಿರಿ,8ಕರ್ತನಾದ ಯೆಹೋವನು ಇಂತೆನ್ನುತ್ತಾನೆ <<ಅಯ್ಯೋ, ನನ್ನ ಮಂದೆಯು ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.>>9<< <ಆದಕಾರಣ, ಕುರುಬರೇ, ಯೆಹೋವನ ವಾಕ್ಯವನ್ನು ಕೇಳಿರಿ,10ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.>>ಯೆಹೋವನೇ ಒಳ್ಳೆಯ ಕುರುಬನು
11<< <ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.12ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು.13<< < <<ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು.14ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಟಿಯುಳ್ಳ ಮೇವನ್ನು ಮೇಯುವವು.15ನಾನೇ ನನ್ನ ಕುರಿಗಳನ್ನು ಮೇಯಿಸಿ, ಹಾಯಾಗಿ ಮಲಗುವಂತೆ ಮಾಡುವೆನು>> ಇದು ಕರ್ತನಾದ ಯೆಹೋವನ ನುಡಿ.16<<ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.>>ದುರ್ಬಲರಿಗೆ ಪ್ರಬಲರ ಹಿಂಸೆ
17<< <ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿಮೇಕೆಗಳಿಗೂ, ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯ ತೀರಿಸುವೆನು.18(ಟಗರುಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?19ನೀವು ತುಳಿದು ಕಾಲಕಸ ಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು; ನೀವು ಕಾಲಿನಿಂದ ಕಲಕಿ ಹೊಲಸು ಮಾಡಿದ್ದನ್ನು ಅವು ಕುಡಿಯಬೇಕಾಯಿತು.>>20<< <ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ, ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುತ್ತೇನೆ.21ಏಕೆಂದರೆ (ಟಗರುಹೋತಗಳೇ,) ನೀವು ಕುರಿಮೇಕೆಗಳನ್ನು ಪಕ್ಕೆಯಿಂದಲೂ, ಹೆಗಲಿನಿಂದಲೂ ನೂಕುತ್ತಾ, ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ, ನನ್ನ ಹಿಂಡನ್ನು ಚದುರಿಸಿಬಿಟ್ಟಿರಿ.22ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಕೊಳ್ಳೆಯಾಗದಂತೆ ನಾನು ಅದನ್ನು ರಕ್ಷಿಸಿ, ಟಗರುಹೋತಗಳಿಗೂ, ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.>>ದೇವರ ಕೃಪಾಪೂರ್ಣವಾದ ಒಡಂಬಡಿಕೆ
23<< <ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.24ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಅರಸನಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.25<< <ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.26ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.27ತೋಟದ ಮರಗಳು ಹಣ್ಣುಬಿಡುವುದು; ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುದು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಬಂಧನಗಳನ್ನು ಮುರಿದು ಹಾಕಿ, ಅವರನ್ನು ದಾಸರಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವುದು.28<< <ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡುವುದಿಲ್ಲ, ಕಾಡು ಮೃಗಗಳು ಅವರನ್ನು ತಿನ್ನುವುದಿಲ್ಲ; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.29ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡುವುದಿಲ್ಲ, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗುವುದಿಲ್ಲ.30<< <ಆಗ ಅವರು ತಮ್ಮ ದೇವರಾದ ಯೆಹೋವನೆಂಬ ನಾನು ತಮ್ಮೊಂದಿಗೆ ಇದ್ದೇನೆಂತಲೂ, ಇಸ್ರಾಯೇಲ್ ವಂಶದವರಾದ ತಾವು ತನ್ನ ಜನರಾಗಿದ್ದೇವೆಂತಲೂ ತಿಳಿದುಕೊಳ್ಳುವರು> >> ಇದು ಕರ್ತನಾದ ಯೆಹೋವನ ನುಡಿ.31<<ನೀವು ನನ್ನ ಕುರಿಗಳು, ನನ್ನ ಮೇವಿನ ಮಂದೆಯ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.>>
35ಎದೋಮಿನ ಬಗ್ಗೆ ಪ್ರವಾದನೆ
1ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ನೀನು ಸೇಯೀರ್ ಬೆಟ್ಟದ ಸೀಮೆಯ ವಿರುದ್ಧವಾಗಿ ಅದಕ್ಕೆ ಈ ಪ್ರವಾದನೆಯನ್ನು ನುಡಿ,3ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಸೇಯೀರ್ ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳು ಮಾಡುವೆನು.4ನಾನು ನಿನ್ನ ಪಟ್ಟಣಗಳನ್ನು ನಾಶಪಡಿಸಲು ನೀನು ಹಾಳಾಗುವಿ; ಆಗ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿ.5<< <ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ.6ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು> >> ಇದು ಕರ್ತನಾದ ಯೆಹೋವನ ನುಡಿ.7<<ಸೇಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಮಾಡಿ, ಅದರೊಳಗೆ ಹೋಗುವವರನ್ನೂ, ಬರುವವರನ್ನೂ ಕಡಿದುಹಾಕುವೆನು.8ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವೆನು; ಖಡ್ಗದಿಂದ ಹತರಾದವರು ನಿನ್ನ ಗುಡ್ಡಗಳಲ್ಲಿ, ಕಣಿವೆಗಳಲ್ಲಿ, ಹಳ್ಳಗಳಲ್ಲಿ ಬಿದ್ದುಹೋಗುವರು.9ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.>>10ನೀನು, <<ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು>> ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ,11<<ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ, ಹೊಟ್ಟೆಕಿಚ್ಚಿಗೂ ನಾನು ನಿನ್ನ ವಿರುದ್ಧವಾಗಿ ನ್ಯಾಯ ತೀರಿಸಿದ ಮೇಲೆ, ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.12ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ. ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ, ಆಹಾ, ಹಾಳಾದವು! ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.13ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.>>14ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ನಿನ್ನನ್ನು ಹಾಳುಮಾಡಿ, ಲೋಕವನ್ನೆಲ್ಲಾ ಸಂತೋಷಪಡಿಸುವೆನು.15ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.>>
36ಇಸ್ರಾಯೇಲ್ಯರ ಮುಂದಿನ ಸೌಭಾಗ್ಯವೂ
1<<ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, <ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.2ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, <<ಆಹಾ!>> ಎನ್ನುತ್ತಾ, ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ> >> ಎಂದು ಹೇಳುವರು.3ಈ ಪ್ರವಾದನೆಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು, << <ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು, ಹರಟೆಗಾರರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.4ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ,5ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.>6ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!>7ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನಿಮ್ಮ ಸುತ್ತಣ ಆ ಅನ್ಯಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.8ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳ ಕೊಂಬೆಗಳನ್ನು ಹರಡಿಕೊಂಡು, ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವವು. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.9ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನೀವು ಉತ್ತು, ಬಿತ್ತುವಿರಿ.10ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.11ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.12ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.> >>13ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ>> ಎಂದು ನಿನ್ನನ್ನು ಬಯ್ಯುತ್ತಾರೆ.14<<ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ, ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡುವುದಿಲ್ಲ.15ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ>> ಇದು ಕರ್ತನಾದ ಯೆಹೋವನ ನುಡಿ.16ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,17<<ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ, ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು; ಅವರ ನಡತೆಯು ಮುಟ್ಟಿನ ಅಶುದ್ಧತ್ವದ ಹಾಗಿತ್ತು.18ಅವರು ದೇಶದ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಅಶುದ್ಧಪಡಿಸಿದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿದೆನು.19ಜನಾಂಗಗಳೊಳಗೆ ಅವರನ್ನು ಚದರಿಸಿ, ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ, ದುರಾಚಾರಗಳಿಗೆ ಸರಿಯಾಗಿ ನ್ಯಾಯತೀರಿಸಿದೆನು.20ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, <ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ> ಎಂದು ಅವರಿಗೆ ಹೇಳಿ, ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡುವರು.21ಆದರೆ ಇಸ್ರಾಯೇಲಿನ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು ಮನಮರುಗಿದೆನು.>>22ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ.23ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು>> ಇದು ಕರ್ತನಾದ ಯೆಹೋವನ ನುಡಿ.24<<ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.26ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.27ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.28ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.29ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.30ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು.31ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.>>32ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.>>33ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿ ಮಾಡುವ ದಿನದಲ್ಲಿ, ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.34ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ಹಾಳುಬಿದ್ದು ಭೂಮಿಯನ್ನು ಉಳುವರು.35ಆಗ ಜನರು, <ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ> ಎಂದು ಹೇಳುವರು.36ಯೆಹೋವನಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವನಾದ ನಾನೇ ನುಡಿದಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.>>37ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.38ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆಯೂ ಇರುವರು. ಆದಕಾರಣ ಮನುಷ್ಯರು ಹಾಳು ಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.>>
37ಒಣಗಿದ ಎಲುಬುಗಳ ಪುನರ್ಜೀವನ
1ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಲು, ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದನು.2ನಾನು ಆ ಎಲುಬುಗಳ ಮಧ್ಯೆ ಕಣಿವೆಯನ್ನು ದಾಟಿ ಬರುವಂತೆ ಮಾಡಿದನು. ಇಗೋ! ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.3ಆತನು ನನಗೆ <<ನರಪುತ್ರನೆ, ಈ ಎಲುಬುಗಳಿಗೆ ಜೀವವು ಬರಬಹುದೋ?>> ಎಂದು ಕೇಳಲು ನಾನು, <<ಕರ್ತನಾದ ಯೆಹೋವನೇ, ನೀನೇ ಬಲ್ಲೆ>> ಎಂದು ಉತ್ತರಕೊಟ್ಟೆನು.4ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು, <<ನೀನು ಈ ಎಲುಬುಗಳ ಮೇಲೆ ಪ್ರವಾದಿಸಿ, ಹೀಗೆ ನುಡಿ, <ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ>.5ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ, <ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ.6ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ತಂದು, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.> >>7ನನಗೆ ಅಪ್ಪಣೆಯಾದಂತೆ ನಾನು ಆ ಪ್ರವಾದನೆಯನ್ನು ನುಡಿಯುತ್ತಿರಲು, ಅಲ್ಲಿ ಟಕಟಕ ಶಬ್ದವಾಯಿತು, ಇಗೋ, ಅದು ಕದಲುತ್ತಿತ್ತು. ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಜೋಡಣೆಯಾದವು.8ನಾನು ನೋಡುತ್ತಿರುವಾಗ ಏನಾಶ್ಚರ್ಯ ಆಹಾ, ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲ್ಹೊದಿಕೆಯಾಯಿತು, ಶ್ವಾಸ ಮಾತ್ರ ಇರಲಿಲ್ಲ.9ಆಗ ಆತನು ನನಗೆ, <<ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, <ಓ ಶ್ವಾಸವೇ,> ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನೀನು ಚತುರ್ದಿಕ್ಕುಗಳಿಂದ ಬೀಸಿ, ಈ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಊದು.> >>10ನನಗೆ ಕೊಟ್ಟ ಅಪ್ಪಣೆಯಂತೆ ನಾನು ನುಡಿದು, ಶ್ವಾಸ ಊದಿದೆ. ಇಗೋ, ಉಸಿರು ಅವುಗಳಲ್ಲಿ ಬಂದಿತು, ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ಮಹಾ ಸೈನ್ಯವಾದವು.11ಆಮೇಲೆ ಆತನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, <ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು> >> ಅಂದುಕೊಳ್ಳುತ್ತಿದ್ದಾರೆ.12ಆದಕಾರಣ ನೀನು ಈ ಪ್ರವಾದನೆಯನ್ನು ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಜನರೇ, ನೋಡಿರಿ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.13ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.14ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು, ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ>> ಇದು ಯೆಹೋವನ ಸಂಕಲ್ಪ.ಇಸ್ರಾಯೇಲೂ ಯೆಹೂದವೂ ಒಂದೇ ರಾಜ್ಯವಾಗುವುದು
15ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,16<<ನರಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು, ಅದರಲ್ಲಿ ಯೆಹೂದದ್ದು ಮತ್ತು ಯೆಹೂದಕ್ಕೆ ಸೇರಿದ ಇಸ್ರಾಯೇಲರದು ಎಂದು ಬರೆದು, ಇನ್ನೊಂದು ಕೋಲನ್ನು ತೆಗೆದುಕೊಂಡು ಅದರಲ್ಲಿ ಯೋಸೇಫಿನದು, ಎಫ್ರಾಯೀಮಿನದು, ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲರದು ಎಂದು ಬರೆ.17ಆ ಮೇಲೆ ಅವು ನಿನ್ನ ಕೈಯಲ್ಲಿ ಒಂದಾಗುವಂತೆ ಅವೆರಡನ್ನೂ ಒಂದಕ್ಕೊಂದು ಉದ್ದವಾಗಿ ಸೇರಿಸಿ ಹಿಡಿ.18<<ನಿನ್ನ ಜನರು, <ಇದೇನು? ನಮಗೆ ತಿಳಿಸುವುದಿಲ್ಲವೋ> ಎಂದು ನಿನ್ನನ್ನು ಕೇಳುವಾಗ ನೀನು ಅವರಿಗೆ,19ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಇಗೋ, ಎಫ್ರಾಯೀಮು ಹಿಡಿದಿರುವ ದಂಡವನ್ನು ಅಂದರೆ ಯೋಸೇಫಿನ ಮತ್ತು ಯೋಸೇಫಿಗೆ ಸೇರಿದ ಇಸ್ರಾಯೇಲ್ ಕುಲಗಳ ಕೋಲನ್ನು ನಾನು ತೆಗೆದು, ಯೆಹೂದದ ಕೋಲಿಗೆ ಉದ್ದವಾಗಿ ಸೇರಿಸಿ, ಅವೆರಡನ್ನು ನನ್ನ ಕೈಯಲ್ಲಿ ಒಂದೇ ಕೋಲನ್ನಾಗಿ ಹಿಡಿಯುವೆನು ಎಂದು ಹೇಳು.20ಹೇಳುವಾಗ ನೀನು ಹೆಸರು ಬರೆದಿರುವ ಕೋಲುಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.> >>21ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು.22ಅಲ್ಲಿ ಇಸ್ರಾಯೇಲಿನ ಪರ್ವತಗಳ ಮೇಲೆ ಒಂದೇ ಜನಾಂಗವನ್ನಾಗಿ ಮಾಡುವೆನು. ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು. ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.23ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.24<<ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.25ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.26ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.27ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.28ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರುವಾಗ ಯೆಹೋವನಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಅನ್ಯಜನಾಂಗದವರು ತಿಳಿದುಕೊಳ್ಳುವರು.>>
38ಗೋಗನ ವಿರುದ್ಧ ದೈವೋಕ್ತಿ
1ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,2<<ನರಪುತ್ರನೇ, ರೋಷಿನವರನ್ನೂ, ಮೆಷೆಕಿನವರನ್ನೂ, ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ಪ್ರವಾದನೆಯನ್ನು ನುಡಿ,3ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ನಾನು ನಿನಗೆ ವಿರುದ್ಧವಾಗಿದ್ದೇನೆ.4ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕಿ, ನಿನ್ನ ಎಲ್ಲಾ ಸೈನ್ಯವನ್ನೂ, ಕುದರೆಗಳನ್ನೂ ಮತ್ತು ಕುದರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯ ಮತ್ತು ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗವನ್ನು ಹಿಡಿದಿರುವರು.5ಅವರೊಂದಿಗೆ ಪಾರಸಿಯರು, ಕೂಷ್ಯರು, ಪೂಟ್ಯರು ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.6ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಗೋಮೆರ್ ಮತ್ತು ಸೈನ್ಯದವರನ್ನೂ, ತೋಗರ್ಮದವರನ್ನು ಮತ್ತು ಅನೇಕ ಜನರನ್ನು ನಿನ್ನೊಂದಿಗೆ ಬರಮಾಡುವೆನು.7<< <ಸಿದ್ಧವಾಗಿರು! ನಿನ್ನಲ್ಲಿ ಕೂಡಿಬಂದಿರುವ ಎಲ್ಲಾ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವರ ದಂಡ ನಾಯಕನಾಗಿರು.8ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.9ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.> >>10ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು ಮತ್ತು ನೀನು ಕೆಟ್ಟ ಯೋಚನೆಯನ್ನು ಮಾಡುವಿ.11ಆಗ ನೀನು, <ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು> ಅಂದುಕೊಂಡೆ.12ಸುಲಿಗೆಯನ್ನು, ಕೊಳ್ಳೆಯನ್ನು ಹೊಡೆಯಬೇಕೆಂತಲೂ, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಕೂಡಿಸಲ್ಪಟ್ಟ ಧನ ಕನಕ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು, ಭೂಮಿಯ ಮಧ್ಯದಲ್ಲಿ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ.13ಶೆಬದವರೂ, ದೆದಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ, <ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?> >> ಎಂದು ಕೇಳುವರು.14ಹೀಗಿರಲು, <<ನರಪುತ್ರನೇ, ನೀನು ಗೋಗನಿಗೆ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ನನ್ನ ಜನರಾದ ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನಿನಗೆ ಗೊತ್ತಾಗುವುದು.15ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ವಬಲದ ಮಹಾಸೈನ್ಯವಾಗಿ ಗುಂಪು ಕೂಡಿದ ಅನೇಕ ಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವಿ.16ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.> >>17ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳು ಪುರಾತನ ಕಾಲದಲ್ಲಿ ಬಹು ವರ್ಷ ಪ್ರವಾದಿಸುತ್ತಾ, ನಾನು ಒಬ್ಬನನ್ನು ಇಸ್ರಾಯೇಲರ ಮೇಲೆ ಬೀಳ ಮಾಡುವೆನು>> ಎಂದು ಮುಂತಿಳಿಸಿದಂತೆ; ನಾನು ಅವರ ಮೂಲಕ ಮುಂತಿಳಿಸಿದವನು ನೀನೇ ಅಲ್ಲವೇ.ಗೋಗನಿಗಾದ ಶಿಕ್ಷೆ
18ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಗೋಗನು ಇಸ್ರಾಯೇಲ್ ದೇಶದ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.19ನಾನು ರೋಷದಿಂದ ಮತ್ತು ಕೋಪದಿಂದ ಉರಿಯುತ್ತಾ ಹೀಗೆ ನುಡಿದಿದ್ದೇನೆ, <ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಮಹಾಕಂಪನವಾಗುವುದು ಖಂಡಿತ.20ಆಗ ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಕಾಡುಮೃಗಳು ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು, ಭೂಮಂಡಲದ ಸಕಲ ಮನುಷ್ಯರೂ ನನ್ನೆದುರಿಗೆ ನಡುಗುವವು; ಪರ್ವತಗಳು ಉರುಳಿಹೋಗುವವು, ಝರಿಗಳು ಕವಚಿಗೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.> >>21ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು.22ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.23ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.>>
39ಗೋಗನ ಸೋಲು
1ಈಗ, <<ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ.2ನಾನು ನಿನ್ನನ್ನು ಪರಿವರ್ತಿಸಿ, ಮುಂದುವರಿಸಿ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,3ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆದು ಹಾಕಿ, ನಿನ್ನ ಬಲಗೈಯಲ್ಲಿರುವ ಬಾಣಗಳನ್ನು ಬೀಳುವಂತೆ ಮಾಡುವೆನು.4ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.5ನೀನು ತೆರೆದ ಬಯಲಿನಲ್ಲಿ ಬೀಳುವಿ. ಏಕೆಂದರೆ ನಾನೇ ಅಪ್ಪಣೆ ಕೊಟ್ಟಿದ್ದೇನೆ> ಎಂದು ಕರ್ತನಾದ ಯೆಹೋವನ ನುಡಿಯುತ್ತಾನೆ.6ನಾನು ಮಾಗೋಗ್ ದೇಶದ ಮೇಲೂ, ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.7<<ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.>>8ಕರ್ತನಾದ ಯೆಹೋವನು ಇಂತೆನ್ನುತ್ತಾನೆ. <<ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.9<<ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು ಶತ್ರುವಿನ ಆಯುಧಗಳಿಗೆ ಬೆಂಕಿಯಿಟ್ಟು ಸುಟ್ಟುಬಿಡುವರು. ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.10ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು>> ಇದು ಕರ್ತನಾದ ಯೆಹೋವನ ನುಡಿ.11<<ಆ ದಿನದಲ್ಲಿ ಗೋಗನಿಗೆ ನಾನು ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಏರ್ಪಡಿಸುವೆನು; ಲವಣ ಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯೇ. ಅಲ್ಲಿ ಪ್ರಯಾಣ ಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಮತ್ತು ಅವನ ಸಮೂಹವೆಲ್ಲವನ್ನೂ ಸಮಾಧಿ ಮಾಡುವರು; ಅ ಕಣಿವೆಯನ್ನು <ಗೋಗನ ಸಮೂಹದ ಕಣಿವೆ> ಎಂದು ಕರೆಯುವರು.12ಇಸ್ರಾಯೇಲರು ದೇಶವನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಸಮಾಧಿ ಮಾಡುತ್ತಲೇ ಇರುವರು.13ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಸಮಾಧಿ ಮಾಡುವರು. ಹೀಗೆ ನಾನು ಮಹಿಮೆಯನ್ನು ಹೊಂದುವ ದಿನವು ನನ್ನ ಜನರಿಗೆ ಸ್ಮರಣೆಯ ದಿನವಾಗಿರುವುದು>> ಇದು ಕರ್ತನಾದ ಯೆಹೋವನ ನುಡಿ.14ತರುವಾಯ ಅವರು ದೇಶವನ್ನು ಶುದ್ಧಿ ಮಾಡುವುದಕ್ಕೆ ತಕ್ಕವರನ್ನು ಆರಿಸಿ, ದೇಶದಲ್ಲಿ ತಿರುಗುತ್ತಾ ನೆಲದ ಮೇಲೆ ಉಳಿದಿರುವವರನ್ನು ಸಮಾಧಿ ಮಾಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಏಳು ತಿಂಗಳಾದ ಮೇಲೆ ಇವರು ಈ ಹುಡುಕುವ ಕೆಲಸದಲ್ಲಿ ತೊಡಗುವರು.15ಪ್ರಯಾಣಿಕರಲ್ಲಿ ಯಾರೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ನೋಡಿದರೆ, ಅಲ್ಲಿ ಒಂದು ಗುರುತನ್ನು ನಿಲ್ಲಿಸುವರು; ಸಮಾಧಿ ಮಾಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಸಮಾಧಿ ಮಾಡುವ ತನಕ ಆ ಗುರುತು ಹಾಗೆಯೇ ನಿಂತಿರುವುದು.16ಆ ಪಟ್ಟಣಕ್ಕೆ 'ಹಮೇನ್' <<ಸಮೂಹಪುರ>> ಎಂದು ಹೆಸರಾಗುವುದು. ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.17ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, <ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.18ಟಗರುಗಳ, ಕುರಿಗಳ, ಹೋತಗಳ, ಹೋರಿಗಳ ಅಂತು ಬಾಷಾನಿನ ಕೊಬ್ಬಿದ ಪಶುಗಳ ರಕ್ತವನ್ನು ಕುಡಿಯುವಿರಿ. ನೀವು ಬಲಿಷ್ಠರ ಮತ್ತು ಭೂಪತಿಗಳ ಮಾಂಸವನ್ನು ತಿನ್ನುವಿರಿ.19ನಾನು ನಿಮಗೋಸ್ಕರ ಅರ್ಪಿಸುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬಾ ತಿನ್ನುವಿರಿ, ರಕ್ತವನ್ನು ಅಮಲೇರುವವರೆಗೂ ಕುಡಿಯುವಿರಿ.20ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ, ಶೂರ ಸಕಲ ವಿಧವಾದ ಸೈನಿಕರನ್ನು ಬೇಕಾದಷ್ಟು ಭಕ್ಷಿಸುವಿರಿ> >> ಇದು ಕರ್ತನಾದ ಯೆಹೋವನ ನುಡಿ.21<<ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.22ಹೀಗೆ ಇಸ್ರಾಯೇಲ್ ವಂಶದವರು ನಾನೇ ಅವರ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.23<<ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವುದು.24ಅವರ ಪಾಪಕ್ಕೂ, ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ನನ್ನ ಮುಖವನ್ನು ಅವರಿಗೆ ಮರೆಮಾಡಿದ್ದೇನೆ.>>ದೇವಜನರ ಪುನಃಸ್ಥಾಪನೆ
25ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.26ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.27ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು.28<<ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.29ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ>> ಇದು ಕರ್ತನಾದ ಯೆಹೋವನ ನುಡಿ.
40ನೂತನ ದೇವಾಲಯದ ವಿಧಾನ
1ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ, ಮೊದಲನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಪಟ್ಟಣವು ಹಾಳಾದ ಮೇಲೆ ಹದಿನಾಲ್ಕನೆಯ ವರ್ಷದ ಆ ದಿನದಲ್ಲೇ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾಗಲು, ಆತನು ನನ್ನನ್ನು ಅಲ್ಲಿಗೆ ಬರಮಾಡಿದನು.2ಯೆಹೋವನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣದ ಕಡೆ ಆ ಪರ್ವತದ ಮೇಲೆ ಪಟ್ಟಣದಂತಿರುವ ಕಟ್ಟಡಗಳು ಕಾಣಿಸಿತು.3ಆಮೇಲೆ ಆತನು ನನ್ನನ್ನು ಅಲ್ಲಿಗೆ ತಂದಾಗ, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ನೂಲನ್ನು, ಅಳತೆಯ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲೇ ನಿಂತುಕೊಂಡಿದ್ದನು.4ಆ ಪುರುಷನು ನನಗೆ, <<ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು>> ಎಂದು ಹೇಳಿದನು.ಪೂರ್ವದಿಕ್ಕಿನ ಹೆಬ್ಬಾಗಿಲು
5ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಆರು ಮೊಳ ಉದ್ದದ ಅಳತೆ ಕೋಲು ಇತ್ತು. (ಉದ್ದಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ); ಅವನು ಆ ಗೋಡೆಯ ಅಗಲವನ್ನು ಅಳತೆ ಮಾಡಿದಾಗ ಅದರ ಅಗಲವೂ ಮತ್ತು ಎತ್ತರವೂ ಒಂದೇ ಕೋಲಾಗಿತ್ತು.6ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು, ಮೆಟ್ಟಿಲುಗಳನ್ನು ಹತ್ತಿ, ಹೊಸ್ತಿಲಿನ ಅಗಲವನ್ನು ಅಳೆದನು. ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.7ಅಲ್ಲಿ ಗೋಡೆಯಲ್ಲಿದ್ದ ಒಂದೊಂದು ಕೋಣೆಯು ಒಂದು ಕೋಲು ಉದ್ದವಾಗಿಯೂ, ಒಂದು ಕೋಲು ಅಗಲವಾಗಿಯೂ ಇತ್ತು. ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು. ಆ ಗೋಡೆಕೋಣೆಗಳು ಒಂದಕ್ಕೊಂದು ಐದೈದು ಮೊಳ ದೂರವಾಗಿದ್ದವು; ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು.8ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು. ಅದು ಒಂದು ಕೋಲು ಉದ್ದವಾಗಿತ್ತು.9ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯನ್ನು ಎಂಟು ಮೊಳವೆಂದೂ; ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು. ಹೆಬ್ಬಾಗಿಲಿನ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು.10ಪೂರ್ವದಿಕ್ಕಿನ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಗೋಡೆಕೋಣೆಗಳಿದ್ದವು. ಆ ಮೂರಕ್ಕೂ ಒಂದೇ ಅಳತೆ ಇತ್ತು. ಎರಡು ಪಕ್ಕಗಳಲ್ಲಿನ ಕಂಬಗಳೂ ಒಂದೇ ಅಳತೆಯಾಗಿದ್ದವು.11ಅನಂತರ ಅವನು ಹೆಬ್ಬಾಗಿಲ ದ್ವಾರದ ಅಗಲ ಹತ್ತು ಮೊಳವೆಂದೂ ಉದ್ದ ಹದಿಮೂರು ಮೊಳವೆಂದೂ ಅಳೆದನು.12ಎರಡು ಪಕ್ಕಗಳಲ್ಲಿನ ಗೋಡೆಕೋಣೆಗಳ ಮುಂದೆ ಒಂದೊಂದು ಮೊಳ ಅವಕಾಶ; ಎರಡು ಕಡೆಯ ಗೋಡೆಕೋಣೆಗಳ ಅಗಲವು ಮೂರು ಮೊಳ.13ಅವನು ಒಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆಯಿಂದ ಇನ್ನೊಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆ ಅಂದರೆ ಒಂದು ಕೋಣೆಯ ಬಾಗಿಲಿಂದ ಇನ್ನೊಂದು ಕೋಣೆಯ ಬಾಗಿಲಿಗೆ ಹೆಬ್ಬಾಗಿಲಿನ ಅಗಲವನ್ನು ಅಳೆಯಲು ಇಪ್ಪತ್ತೈದು ಮೊಳವಾಗಿತ್ತು.14ಅಂಗಳದಲ್ಲಿನ ಕಂಬಗಳನ್ನು ಅಳತೆ ಮಾಡಲು ಅರವತ್ತು ಮೊಳವಿದ್ದವು; ಅದನ್ನು ಹೆಬ್ಬಾಗಿಲಿನ ಸುತ್ತುಮುತ್ತಲಿರುವ ಕಂಬದವರೆಗೂ ಅಳೆದನು.15ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳ ಬಾಗಿಲಿನ ದ್ವಾರದ ಅಂಗಳದವರೆಗೂ ಐವತ್ತು ಮೊಳ ಉದ್ದವಾಗಿತ್ತು.16ಗೋಡೆ ಕೋಣೆಗಳಲ್ಲಿಯೂ ಒಳ ಎರಡು ಕಡೆಯ ನಿಲುವು ಕಂಬಗಳಲ್ಲಿಯೂ, ಕೈಸಾಲೆಗಳಲ್ಲಿಯೂ ಸಹ ಒಳಗಡೆ ಸುತ್ತಲೂ ಇಕ್ಕಟಾದ ಕಿಟಕಿಗಳಿದ್ದವು. ಒಂದೊಂದು ಗೋಡೆಯ ಮೇಲೆ ಖರ್ಜೂರ ಮರಗಳ ಚಿತ್ರಗಳಿದ್ದವು.ಹೊರಗಿನ ಅಂಗಳ
17ಆ ಮೇಲೆ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದು ತಂದನು; ಇಗೋ, ಕೋಣೆಗಳೂ ಅಂಗಳದ ಸುತ್ತಲೂ ಕಲ್ಲುಹಾಸಿದ ನೆಲವೂ ಕಾಣಿಸಿದವು; ಕಲ್ಲುಹಾಸಿದ ನೆಲದ ಮೇಲೆ ಒಟ್ಟಾಗಿ ಮೂವತ್ತು ಕೊಠಡಿಗಳಿದ್ದವು.18ಆ ಕೆಳಗಣ ಕಲ್ಲುಹಾಸಿದ ನೆಲವೂ ಹೆಬ್ಬಾಗಿಲುಗಳ ಎರಡು ಪಕ್ಕಗಳವರೆಗೂ ಹಾಸಲ್ಪಟಿತ್ತು. ಅದರ ಅಗಲವೂ ಬಾಗಿಲುಗಳ ಉದ್ದಕ್ಕೆ ಸಮನಾಗಿತ್ತು. ಇದು ಕೆಳಗಿನ ಕಲ್ಲುಹಾಸಿದ ನೆಲವಾಗಿತ್ತು.19ಅವನು ಪೂರ್ವಕ್ಕೂ, ಉತ್ತರಕ್ಕೂ ಕೆಳಗಣ ಹೆಬ್ಬಾಗಿಲಿನ ಒಳಗಡೆಯಿಂದ ಒಳಗಣ ಅಂಗಳದ ಹೊರಗಡೆಯ ತನಕ ಅಳೆಯಲು, ಅದು ನೂರು ಮೊಳವಿತ್ತು.ಉತ್ತರದ ಬಾಗಿಲು
20ಇದಲ್ಲದೆ ಹೊರಗಣ ಅಂಗಳದ ಉತ್ತರದ ಹೆಬ್ಬಾಗಿಲಿನ ಅಗಲವನ್ನೂ ಮತ್ತು ಉದ್ದವನ್ನೂ ಅಳೆದನು.21ಅದರೊಳಗೆ ಎರಡು ಕಡೆ ಮೂರು ಗೋಡೆಕೋಣೆಗಳಿದ್ದವು; ಅಲ್ಲಿನ ಕಂಬಗಳೂ ಕೈಸಾಲೆಯೂ ಮೊದಲನೆಯ ಹೆಬ್ಬಾಗಿಲಿನ ಅಳತೆಯಂತಿದ್ದವು. ಆ ಹೆಬ್ಬಾಗಿಲಿನ ಉದ್ದವೂ ಐವತ್ತು ಮೊಳ, ಅಗಲವೂ ಇಪ್ಪತ್ತೈದು ಮೊಳವಾಗಿತ್ತು.22ಅಲ್ಲಿನ ಕಿಟಕಿಗಳೂ, ಕೈಸಾಲೆಯೂ, ಚಿತ್ರಿತವಾಗಿದ್ದ ಖರ್ಜೂರ ಮರಗಳೂ ಮೂಡಣ ಹೆಬ್ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಕೈಸಾಲೆಯು ಅದರ ಒಳಗಡೆಯಿತ್ತು.23ಹೊರಗಣ ಅಂಗಳದ ಉತ್ತರ ಮತ್ತು ಪೂರ್ವಕ್ಕಿರುವ ಹೆಬ್ಬಾಗಿಲುಗಳಿಗೆ ಎದುರಾಗಿ ಒಳಗಣ ಹೆಬ್ಬಾಗಿಲುಗಳು ಇದ್ದವು; ಒಂದು ಬಾಗಿಲಿನಿಂದ ಎದುರು ಬಾಗಿಲಿಗೆ ನೂರು ಮೊಳ ಅಳತೆ ಮಾಡಿದನು.ದಕ್ಷಿಣದ ಬಾಗಿಲು
24ಆ ಮೇಲೆ ಅವನು ನನ್ನನ್ನು ದಕ್ಷಿಣಕ್ಕೆ ಕರೆ ತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು ಇತ್ತು; ಅವನು ಅಲ್ಲಿನ ಕಂಬಗಳನ್ನೂ, ಕೈಸಾಲೆಯನ್ನೂ ಈ ಅಳತೆಯ ಪ್ರಕಾರವೇ ಅಳೆದನು.25ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಕಿಟಕಿಗಳೇ ಇದ್ದವು; ಅದರ ಉದ್ದವೂ ಐವತ್ತು ಮೊಳ ಮತ್ತು ಅಗಲವೂ ಇಪ್ಪತ್ತೈದು ಮೊಳವಾಗಿತ್ತು.26ಅಲ್ಲಿ ಹತ್ತುವುದಕ್ಕೆ ಏಳು ಮೆಟ್ಟಿಲುಗಳಿದ್ದವು. ಕೈಸಾಲೆಯ ಎರಡು ಪಕ್ಕದ ಕಂಬಗಳಲ್ಲಿ ಖರ್ಜೂರ ಮರಗಳ ಚಿತ್ರಗಳಿದ್ದವು.27ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಹೆಬ್ಬಾಗಿಲಿತ್ತು; ದಕ್ಷಿಣದ ಒಂದು ಬಾಗಿಲಿಂದ ಮತ್ತೊಂದು ಬಾಗಿಲಿಗೆ ನೂರು ಮೊಳ ಅಳೆದನು.ಒಳಗಿನ ಅಂಗಳದ ಬಾಗಿಲು
28ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನ ಮಾರ್ಗವಾಗಿ ಒಳಗಣ ಅಂಗಳಕ್ಕೆ ಕರೆದು ತಂದನು. ಅವನು ಆ ದಕ್ಷಿಣ ಹೆಬ್ಬಾಗಿಲನ್ನೂ, ಅಲ್ಲಿನ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಅಳೆಯಲು, ಅದರ ಅಳತೆಗಳೆಲ್ಲ ಸಮನಾಗಿದ್ದವು.29ಅದರಲ್ಲಿಯೂ, ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲಾ ಕಡೆಯಿದ್ದವು; ಹೆಬ್ಬಾಗಿಲಿನ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು.30ಸುತ್ತುಮುತ್ತಲಿನ ಕೈಸಾಲೆಗಳ ಉದ್ದ ಇಪ್ಪತ್ತೈದು ಮೊಳ ಮತ್ತು ಅಗಲ ಐದು ಮೊಳವಾಗಿತ್ತು.31ಆ ಹೆಬ್ಬಾಗಿಲ ಕೈಸಾಲೆಯು ಹೊರಗಣ ಅಂಗಳಕ್ಕೆ ಅಭಿಮುಖವಾಗಿತ್ತು. ಅದರ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು. ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.32ಅವನು ನನ್ನನ್ನು ಒಳಗಣ ಅಂಗಳದ ಪೂರ್ವಕ್ಕೆ ಕರೆದು ತಂದು, ಅಲ್ಲಿನ ಹೆಬ್ಬಾಗಿಲನ್ನೂ ಅಳೆಯಲು, ಅದರ ಅಳತೆಗಳೆಲ್ಲಾ ಒಂದೇ ಆಗಿ ಕಂಡುಬಂದವು.33ಅದರಲ್ಲಿಯೂ ಮತ್ತು ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಕಿಟಕಿಗಳಿದ್ದವು; ಆ ಹೆಬ್ಬಾಗಿಲಿನ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು.34ಅದರ ಕೈಸಾಲೆಯು ಹೊರಗಿನ ಅಂಗಳಕ್ಕೆ ಅಭಿಮುಖವಾಗಿತ್ತು; ಕೈಸಾಲೆಯ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.35ಆ ಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿಗೆ ಕರೆದು ತಂದನು. ಅದರ ಗೋಡೆಕೋಣೆ, ಕಂಬ, ಕೈಸಾಲೆ ಇವುಗಳನ್ನೂ ಆ ಅಳತೆಯ ಪ್ರಕಾರವೇ ಅಳೆದನು.36ಅಲ್ಲಿನ ಕೋಣೆಗಳ, ಕಂಬಗಳ, ಕೈಸಾಲೆಗಳ ಎಲ್ಲಾ ಕಡೆಗಳಲ್ಲಿಯೂ ಕಿಟಕಿಗಳಿದ್ದವು; ಅದರ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು.37ಅದರ ಕಂಬಗಳು, ಕೈಸಾಲೆಗಳು ಹೊರಗಣ ಅಂಗಳಕ್ಕೆ ಅಭಿಮುಖವಾಗಿದ್ದವು; ಆ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.ಯಜ್ಞಗಳನ್ನು ಸಿದ್ಧಪಡಿಸುವ ಕೋಣೆಗಳು
38ಹೆಬ್ಬಾಗಿಲ ಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ, ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ಸರ್ವಾಂಗಹೋಮ ಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.39ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು.40ಉತ್ತರದ ಹೆಬ್ಬಾಗಿಲಿನ ಪ್ರವೇಶ ಸ್ಥಾನದ ಮೆಟ್ಟಿಲುಗಳ ಹತ್ತಿರ ಎರಡು ಪೀಠಗಳು ಇದ್ದವು.41ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ನಾಲ್ಕು ನಾಲ್ಕು ಪೀಠಗಳು, ಒಟ್ಟಿಗೆ ಯಜ್ಞಪಶುಗಳನ್ನು ವಧಿಸುವ ಎಂಟು ಪೀಠಗಳಿದ್ದವು.42ಇದಲ್ಲದೆ ಸರ್ವಾಂಗಹೋಮಕ್ಕಾಗಿ ಉಪಯುಕ್ತವಾದ ಕೆತ್ತಿದ ಕಲ್ಲಿನ ನಾಲ್ಕು ಪೀಠಗಳಿದ್ದವು. ಅವುಗಳ ಅಗಲ ಒಂದುವರೆ ಮೊಳ, ಉದ್ದ ಒಂದುವರೆ ಮೊಳ, ಎತ್ತರ ಒಂದುವರೆ ಮೊಳವಾಗಿತ್ತು. ಅವುಗಳ ಮೇಲೆ ಸರ್ವಾಂಗಹೋಮ ಪಶುಗಳನ್ನು ವಧಿಸುವ ಉಪಕರಣಗಳನ್ನು ಇಡುತ್ತಿದ್ದರು.43ಒಳಗೆ, ಸುತ್ತಲು ಕೈ ಅಗಲದಷ್ಟು ಕೊಂಡಿಗಳು ಜಡಿಯಲ್ಪಟ್ಟಿದ್ದವು. ನೈವೇದ್ಯ ಮಾಂಸವು ಪೀಠಗಳ ಮೇಲಿತ್ತು.ಯಾಜಕರ ಕೋಣೆಗಳು
44ಆ ಮೇಲೆ ಅವನು ನನ್ನನ್ನು ಒಳಗಣ ಅಂಗಳಕ್ಕೆ ಕರೆ ತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರದ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ಒಂದು ಕೋಣೆಯು ಉತ್ತರಕ್ಕೂ, ಇನ್ನೊಂದು ಕೋಣೆಯು ದಕ್ಷಿಣಕ್ಕೂ ಇತ್ತು.45ಆಗ ಅವನು ನನಗೆ, <<ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಮೇಲ್ವಿಚಾರಣೆಯನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.46ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿ ಸೇವಕರಾಗಿದ್ದಾರೆ>> ಎಂದು ಹೇಳಿದನು.47ಆ ಮೇಲೆ ಅವನು ಅಂಗಳವನ್ನು ಅಳೆಯಲು, ಅದು ನೂರು ಮೊಳ ಉದ್ದವಾಗಿಯೂ, ನೂರು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು. ಯಜ್ಞವೇದಿಯು ದೇವಸ್ಥಾನದ ಮುಂದೆ ಇತ್ತು.ದೇವಾಲಯದ ದ್ವಾರಮಂಟಪ
48ಕೂಡಲೆ ಅವನು ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರೆ ತಂದನು. ಅದನ್ನು ಅಳೆಯಲು, ಅದರ ಎದುರುಬದುರಿನ ಕಂಬಗಳ ಅಗಲ ಐದೈದು ಮೊಳ, ಬಾಗಿಲಿನ ಎರಡು ಪಕ್ಕದ ಗೋಡೆಗಳ ಅಗಲ ಮೂರು ಮೂರು ಮೊಳವಾಗಿತ್ತು.49ದ್ವಾರಮಂಟಪದ ಉದ್ದ ಇಪ್ಪತ್ತು ಮೊಳ, ಅಗಲ ಹನ್ನೊಂದು ಮೊಳ ಇದ್ದವು. ಹತ್ತು ಮೆಟ್ಟಿಲುಗಳನ್ನು ಹತ್ತಿ, ಅಲ್ಲಿಗೆ ಸೇರುತ್ತಿದ್ದರು. ಎರಡು ಕಡೆಯ ಕಂಬಗಳ ಪಕ್ಕದಲ್ಲಿ ಒಂದೊಂದು ಉಪಸ್ತಂಭವು ಇತ್ತು.
41ಪರಿಶುದ್ಧ ಸ್ಥಳ
1ಆಮೇಲೆ ಅವನು ನನ್ನನ್ನು ದೇವಾಲಯದ ಪರಿಶುದ್ಧ ಸ್ಥಳಕ್ಕೆ ಕರೆದುಕೊಂಡು ಬಂದು, ಅದರ ದ್ವಾರಕಂಬಗಳನ್ನು ಅಳತೆ ಮಾಡಲು, ಅದರ ಎರಡು ಕಡೆಗಳು ಆರು ಮೊಳ ಅಗಲವಾಗಿತ್ತು.2ದ್ವಾರದ ಅಗಲವು ಹತ್ತು ಮೊಳಗಳೂ, ದ್ವಾರದ ಎರಡು ಪಕ್ಕದ ಗೋಡೆಗಳ ಅಗಲವು ಐದೈದು ಮೊಳಗಳೂ ಆಗಿದ್ದವು. ಅವನು ಪರಿಶುದ್ಧ ಸ್ಥಳವನ್ನು ಅಳತೆಮಾಡಿದಾಗ ಅದರ ಉದ್ದ ನಲ್ವತ್ತು ಮೊಳಗಳೂ, ಅಗಲ ಇಪ್ಪತ್ತು ಮೊಳಗಳೂ ಇದ್ದವು.ಮಹಾಪರಿಶುದ್ಧ ಸ್ಥಳ
3ಆಮೇಲೆ ಅವನು ಇನ್ನೂ ಮುಂದಕ್ಕೆ ಹೋಗಿ, ಮಹಾಪರಿಶುದ್ಧ ಸ್ಥಳದ ಕಂಬಗಳನ್ನು ಅಳತೆ ಮಾಡಲು ದ್ವಾರದ ಒಂದೊಂದು ಕಂಬದ ಅಗಲ ಎರಡೆರಡು ಮೊಳಗಳೂ, ದ್ವಾರದ ಅಗಲವು ಆರು ಮೊಳಗಳೂ, ದ್ವಾರದ ಪಕ್ಕದ ಗೋಡೆಗಳ ಅಗಲವು ಏಳು ಮೊಳವೆಂದು ಅಳೆದನು.4ಅದರ ಕೋಣೆಗಳ ಉದ್ದವು ಇಪ್ಪತ್ತು ಮೊಳಗಳೂ, ಅಗಲವು ಇಪ್ಪತ್ತು ಮೊಳಗಳೂ ಇದ್ದವು. ಆಗ ಅವನು ನನಗೆ, <<ಇದು ಮಹಾಪರಿಶುದ್ಧ ಸ್ಥಳ>> ಎಂದು ಹೇಳಿದನು.ದೇವಸ್ಥಾನದ ಸುತ್ತಣ ಕೊಠಡಿಗಳು
5ಆಮೇಲೆ ಅವನು ಅಳತೆ ಮಾಡಲು, ದೇವಸ್ಥಾನದ ಗೋಡೆಯ ಅಗಲ ಆರು ಮೊಳಗಳೂ, ದೇವಸ್ಥಾನದ ಸುತ್ತುಮುತ್ತಲೂ ಎಲ್ಲಾ ಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ನಾಲ್ಕು ನಾಲ್ಕು ಮೊಳಗಳೂ ಇದ್ದವು.6ಆ ಕೊಠಡಿಗಳು ಒಂದರ ಮೇಲೊಂದು ಮೂರು ಅಂತಸ್ತು ಆಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಕೊಠಡಿಗಳಿದ್ದವು; ದೇವಸ್ಥಾನದ ಗೋಡೆಯು ಮೆಟ್ಟಿಲುಗಳಿಂದ ಕಟ್ಟಲ್ಪಟ್ಟಿತ್ತು. ಗೋಡೆಯಲ್ಲಿ ರಂಧ್ರವಿಲ್ಲದೆ ಆ ಮೆಟ್ಟಿಲುಗಳೇ ಸುತ್ತಣ ಕೊಠಡಿಗಳ ತೊಲೆಗಳಿಗೆ ಆಧಾರವಾಗಿದ್ದವು. ಆದರೆ ಮನೆಯ ಗೋಡೆಗೆ ಯಾವ ಆಧಾರವಿರಲಿಲ್ಲ.7ಸುತ್ತಣ ಅಂತಸ್ತುಗಳು ಮೇಲೆ ಹೋದ ಹಾಗೆಲ್ಲಾ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು. ಅವು ದೇವಸ್ಥಾನವನ್ನು ಸುತ್ತಿಕೊಂಡು ಮೇಲೆ ಹೋದ ಹಾಗೆಲ್ಲಾ ಅದನ್ನು ಬಿಗಿಯಾಗಿ ತಬ್ಬಿಕೊಂಡಂತೆ ಕಟ್ಟಲ್ಪಟ್ಟಿತ್ತು. ಹೀಗೆ ಮೇಲಿನ ಅಂತಸ್ತುಗಳು ದೇವಸ್ಥಾನದ ಕಡೆಗೆ ಅಗಲವಾಗುತ್ತಾ ಬಂದವು. ಕೆಳಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದರು.8ದೇವಸ್ಥಾನದ ಸುತ್ತುಮುತ್ತಲೂ ಒಂದು ಜಗಲಿಯು ಕಾಣಿಸಿತು; ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮೊಳದ ಅಳತೆ ಕೋಲಿನಷ್ಟು ಎತ್ತರವಾಗಿತ್ತು.9ಕೊಠಡಿಗಳ ಹೊರ ಗೋಡೆಯ ದಪ್ಪವು ಐದು ಮೊಳವಿತ್ತು ಮತ್ತು ಉಳಿದದ್ದು, ಒಳಗಿನ ಪಕ್ಕದ ಕೊಠಡಿಗಳ ಸ್ಥಳವಾಗಿತ್ತು.10ದೇವಸ್ಥಾನಕ್ಕೆ ಅಂಟಿಕೊಂಡ ಆ ಕೊಠಡಿಗಳಿಗೂ, ಪ್ರತ್ಯೇಕಿಸಿದ ಸ್ಥಳದ ಕೋಣೆಗಳಿಗೂ ನಡುವೆ ದೇವಸ್ಥಾನದ ಸುತ್ತುಮುತ್ತಲೂ ಇಪ್ಪತ್ತು ಮೊಳ ಅಂತರವಿತ್ತು.11ಆ ಎಲ್ಲಾ ಕೊಠಡಿಗಳ ಪ್ರವೇಶಕ್ಕೂ ಎರಡೇ ಬಾಗಿಲು, ಉತ್ತರಕ್ಕೊಂದು, ದಕ್ಷಿಣಕ್ಕೊಂದು. ಅವೆರಡೂ ಜಗಲಿಯ ಕಡೆಗಿದ್ದವು. ಆ ಜಗಲಿಗಳೂ ಎಲ್ಲಾ ಸುತ್ತಲಿನ ಅಗಲವು ಐದು ಮೊಳವಾಗಿತ್ತು.ದೇವಸ್ಥಾನದ ಹಿಂದಿನ ಶಾಲೆಯ ಅಳತೆಗಳೂ ಇತರ ಅಳತೆಗಳೂ
12ಪಶ್ಚಿಮದಲ್ಲಿ ಪ್ರತ್ಯೇಕಿಸಿದ ಸ್ಥಳದ ಹಿಂದಿನ ಶಾಲೆಯ ಅಗಲ ಎಪ್ಪತ್ತು ಮೊಳವೂ, ಉದ್ದ ತೊಂಭತ್ತು ಮೊಳವೂ, ಅದರ ಗೋಡೆಯ ದಪ್ಪ ಐದು ಮೊಳವಾಗಿತ್ತು.13ಆ ಪುರುಷನು ಅಳೆಯಲು, ದೇವಸ್ಥಾನದ ಉದ್ದ ನೂರು ಮೊಳವೂ, ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದು ಅಳೆದನು.14ಇದಲ್ಲದೆ ದೇವಸ್ಥಾನದ ಮುಂಭಾಗ ಮತ್ತು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳ ಇವುಗಳ ಒಟ್ಟು ಅಗಲ ನೂರು ಮೊಳವಾಗಿದ್ದವು.15ಅವನು ಪ್ರತ್ಯೇಕಿಸಿದ ಸ್ಥಳವನ್ನೂ, ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳತೆ ಮಾಡಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ನೂರು ಮೊಳವಿತ್ತು.ದೇವಸ್ಥಾನದ ಒಳಭಾಗದ ವರ್ಣನೆ
16ಅವನು ಬಾಗಿಲುಗಳ ಕಂಬಗಳನ್ನೂ, ಇಕ್ಕಟ್ಟಾದ ಕಿಟಕಿಗಳನ್ನೂ ಮತ್ತು ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತಿನ ಬಾಗಿಲಿಗೆ ಎದುರಾಗಿ ಸುತ್ತಲೂ ಕಟ್ಟಲ್ಪಟ್ಟ ಗೋಡೆಗಳನ್ನೂ ಅಳೆದನು.17ದ್ವಾರದಿಂದ ಗರ್ಭಗೃಹದವರೆಗೂ ಮತ್ತು ಗೃಹದ ಗೋಡೆಗೆಲ್ಲಾ ಸುತ್ತುಮುತ್ತಲೂ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿಗಿದ್ದವು.18ಗೋಡೆಯ ಚೌಕಗಳಲ್ಲಿ ಕೆರೂಬಿಗಳೂ ಮತ್ತು ಖರ್ಜೂರ ಮರಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ಮರ; ಒಂದೊಂದು ಕೆರೂಬಿಗೆ ಎರಡೆರಡು ಮುಖಗಳಿತ್ತು.19ಖರ್ಜೂರ ಮರದ ಒಂದು ಪಕ್ಕ ಮನುಷ್ಯನ ಮುಖಕ್ಕೆ ಎದುರಾಗಿಯೂ, ಇನ್ನೊಂದು ಪಕ್ಕ ಸಿಂಹದ ಮುಖಕ್ಕೆ ಎದುರಾಗಿತ್ತು. ಹೀಗೆ ದೇವಸ್ಥಾನದ ಒಳಗಿನ ಭಾಗವೆಲ್ಲಾ ಮತ್ತು ಸುತ್ತುಮುತ್ತಲೂ ಚಿತ್ರಮಯವಾಗಿತ್ತು.20ನೆಲದಿಂದ ದ್ವಾರದ ಮೇಲಿನ ತನಕ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳಿದ್ದವು.21ಪರಿಶುದ್ಧ ಸ್ಥಳದ ಇನ್ನೊಂದು ಕಡೆಯ ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು. ಮಹಾಪರಿಶುದ್ಧ ಸ್ಥಳದ ಈಚಿನ ಗೋಡೆಯ ಚೌಕಟ್ಟೂ ಹಾಗೆಯೇ ಇತ್ತು.22ಅಲ್ಲಿ ಮರದ ವೇದಿಕೆಯೊಂದಿತ್ತು. ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳವಾಗಿತ್ತು. ಅದರ ಮೂಲೆಗಳೂ, ಪೀಠವೂ, ಪಕ್ಕಗಳೂ ಮರದ್ದೇ ಆಗಿದ್ದವು. ಆ ಪುರುಷನು ನನಗೆ, <<ಇದು ಯೆಹೋವನ ಸಮ್ಮುಖದ ಮೇಜು>> ಎಂದು ಹೇಳಿದನು.23ಪರಿಶುದ್ಧ ಸ್ಥಳಕ್ಕೆ ಮತ್ತು ಮಹಾಪರಿಶುದ್ಧ ಸ್ಥಳಕ್ಕೆ ಎರಡೆರಡು ಬಾಗಿಲುಗಳಿದ್ದವು.24ಒಂದೊಂದು ಬಾಗಿಲಿಗೆ ಎರಡೆರಡು ಮಡಚುವ ಭಾಗಗಳಿದ್ದವು. ಈ ಕಡೆಯ ಬಾಗಿಲಿಗೆ ಎರಡು ಭಾಗ, ಆ ಕಡೆಯ ಬಾಗಿಲಿಗೆ ಎರಡು ಭಾಗಗಳು ಇದ್ದವು.25ಆ ಬಾಗಿಲುಗಳಲ್ಲಿ ಅಂದರೆ ಪರಿಶುದ್ಧ ಸ್ಥಳದ ಬಾಗಿಲುಗಳಲ್ಲಿ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳು ಗೋಡೆಗಳಲ್ಲಿ ಚಿತ್ರಿಸಲ್ಪಟ್ಟ ಹಾಗೆಯೇ ಇದ್ದವು. ದ್ವಾರಮಂಟಪದ ಹೊರಗಡೆ ಮರದ ಹಲಗೆಗಳಿದ್ದವು.26ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಇದ್ದವು. ಅವುಗಳ ಮೇಲೆ ಖರ್ಜೂರ ಮರಗಳು ಚಿತ್ರಿತವಾಗಿದ್ದವು ಮತ್ತು ಮೇಲೆ ತೂಗಾಡುವ ಮೇಲ್ಛಾವಣಿಗಳು ಇದ್ದವು.
42ಯಾಜಕರ ಕೋಣೆಗಳು
1ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆದು ತಂದನು.2ನೂರು ಮೊಳ ಉದ್ದಕ್ಕೆ ಎದುರಾಗಿರುವ ಉತ್ತರದ ಬಾಗಿಲಿನ ಅಗಲವು ಐವತ್ತು ಮೊಳವಾಗಿತ್ತು.3ಒಳಗಿನ ಅಂಗಳಕ್ಕೆ ಸೇರಿದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ, ಹೊರಗಿನ ಅಂಗಳದ ಕಲ್ಲುಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಿದ್ದವು ಅವುಗಳಲ್ಲಿ ಪಡಸಾಲೆಗಳಿದ್ದವು.4ಕೋಣೆಗಳ ಒಳಗೆ ಹೋಗಲು, ನೂರು ಮೊಳ ಉದ್ದದ ಮತ್ತು ಹತ್ತು ಮೊಳ ಅಗಲದ ಹಾದಿ ಇತ್ತು. ಕೋಣೆಗಳ ಬಾಗಿಲುಗಳು ಉತ್ತರದಿಕ್ಕಿನ ಕಡೆಗಿದ್ದವು.5ಮೇಲಿನ ಕೋಣೆಗಳು, ಮಧ್ಯದ ಮತ್ತು ಕೆಳಗಿನ ಕೋಣೆಗಳಿಗಿಂತ ಚಿಕ್ಕದಾಗಿದ್ದವು. ಏಕೆಂದರೆ ಕಟ್ಟಡದ ಮಧ್ಯದ ಮತ್ತು ಕೆಳಗಿನ ಭಾಗಕ್ಕಿಂತಲೂ ಪಡಸಾಲೆಗಳು ಎತ್ತರದಲ್ಲಿದ್ದವು.6ಕೋಣೆಗಳು ಮೂರು ಅಂತಸ್ತಾಗಿದ್ದವು. ಹೊರಗಿನ ಅಂಗಳದ ಕೋಣೆಗಳಿಗೆ ಇದ್ದಂತೆ ಈ ಕೋಣೆಗಳಿಗೆ ಪಡಸಾಲೆಗಳಿರಲಿಲ್ಲ. ಆದುದರಿಂದ ನೆಲದಿಂದ ಎತ್ತರದಲ್ಲಿದ್ದ ಮೇಲಿನ ಕೋಣೆಗಳು ಕೆಳಗಿನ ಮತ್ತು ಮಧ್ಯದ ಕೋಣೆಗಳಿಗಿಂತ ಚಿಕ್ಕದಾಗಿದ್ದವು.7ಹೊರಗಿನ ಅಂಗಳದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರಗೋಡೆಯೊಂದಿತ್ತು. ಅದು ಐವತ್ತು ಮೊಳ ಉದ್ದವಾಗಿ, ಎರಡನೆಯ ಸಾಲಿಗೆ ಎದುರಾಗಿತ್ತು.8ಹೊರಗಿನ ಅಂಗಳದ ಕಡೆಗಿರುವ ಕೋಣೆಗಳ ಸಾಲಿನ ಉದ್ದ ಐವತ್ತು ಮೊಳವು, ದೇವಸ್ಥಾನದ ಎದುರಿಗಿರುವ ಕೋಣೆಗಳ ಸಾಲಿನ ಉದ್ದ ನೂರು ಮೊಳವಾಗಿತ್ತು.9ಕೆಳಗಿನ ಕೋಣೆಗಳಿಗೆ ಹೋಗಲು, ಅಂಗಳದ ಪೂರ್ವದಿಕ್ಕಿಗೆ ಒಂದು ಮಾರ್ಗವಿತ್ತು.10ಇದಲ್ಲದೆ, ಪೂರ್ವಕಡೆಗೆ ಅಂಗಳದ ಪ್ರತ್ಯೇಕ ಸ್ಥಳಕ್ಕೂ ಮತ್ತು ಪೌಳಿಗೋಡೆಯ ಮಧ್ಯದಲ್ಲಿ ಕೋಣೆಗಳಿದ್ದವು.11ಇವುಗಳ ಮುಂದೆ ಮಾರ್ಗವಿತ್ತು. ಅವು ಉತ್ತರದ ಕೋಣೆಗಳಂತೆ ಕಾಣಿಸುತ್ತಿದ್ದವು. ಇವುಗಳ ಉದ್ದವೂ ಮತ್ತು ಅಗಲವೂ ಒಂದೇ ಆಗಿತ್ತು. ಇವುಗಳ ರಚನಾಕ್ರಮ, ನಿರ್ಗಮನದ ಸ್ಥಾನಗಳೆಲ್ಲವೂ ದಕ್ಷಿಣದ ಕೋಣೆಗಳ ಹಾಗೆಯೇ ಇದ್ದವು.12ದಕ್ಷಿಣ ಕಡೆಗಿದ್ದ ಕೋಣೆಗಳ ಬಾಗಿಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ, ಪೂರ್ವದ ಕಡೆಯ ಗೋಡೆಗೆ ಸರಿಯಾದ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು.13ಆಗ ಅವನು ನನಗೆ, <<ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.14ಯಾಜಕರು ಪರಿಶುದ್ಧ ಸ್ಥಳವನ್ನು ಪ್ರವೇಶಿಸಿದ ಮೇಲೆ, ಅದನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವು ಪರಿಶುದ್ಧವೇ. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಸಾಮಾನ್ಯ ಜನರ ಅಂಗಳಕ್ಕೆ ಬರಬೇಕು>> ಎಂದನು.ದೇವಾಲಯದ ಸುತ್ತುಮುತ್ತಣ ಅಳತೆ
15ಆ ಪುರುಷನು ಒಳಗಿನ ಆಲಯವನ್ನು ಅಳತೆ ಮಾಡಿದ ನಂತರ ನನ್ನನ್ನು ಪೂರ್ವದ ಹೆಬ್ಬಾಗಿಲಿನ ಮಾರ್ಗವಾಗಿ ಹೊರಗೆ ಕರೆದುಕೊಂಡು ಬಂದು, ಆಲಯದ ಸುತ್ತಲೂ ಅಳತೆ ಮಾಡಿದನು.16ಪೂರ್ವದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.17ಉತ್ತರದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.18ದಕ್ಷಿಣದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.19ಪಶ್ಚಿಮಕ್ಕೆ, ಗೋಡೆಯ ಕಡೆಗೆ ತಿರುಗಿಕೊಂಡು ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.20ಆಲಯವನ್ನು ನಾಲ್ಕು ಕಡೆಗಳಲ್ಲಿಯೂ ಅಳೆದನು. ಪವಿತ್ರವಾದ ಮತ್ತು ಅಪವಿತ್ರವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರು ಕೋಲು ಉದ್ದವಾದ ಮತ್ತು ಐನೂರು ಕೋಲು ಅಗಲವಾದ ಗೋಡೆ ಇತ್ತು.
43ದೇವಾಲಯದಲ್ಲಿ ಯೆಹೋವನ ಪುನರಾಗಮನ
1ಆಮೇಲೆ ಆತನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿಗೆ ಕರೆದುಕೊಂಡು ಹೋದನು.2ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು.3ನಾನು ಕಂಡು ದರ್ಶನವೂ, ಆತನು ಪಟ್ಟಣವನ್ನು ಹಾಳುಮಾಡಲು ಬಂದಾಗ ನೋಡಿದ ದರ್ಶನದ ಹಾಗೂ, ಕೆಬಾರ್ ನದಿಯ ಹತ್ತಿರ ನನಗಾದ ದರ್ಶನದ ಹಾಗೂ ಇತ್ತು. ಆಗ ನಾನು ಬೋರಲು ಬಿದ್ದೆನು.4ಆಗ ಯೆಹೋವನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯವನ್ನು ಪ್ರವೇಶಿಸಿತು.5ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.6ಆಗ ಆಲಯದೊಳಗಿಂದ ನನ್ನ ಸಂಗಡ ಮಾತನಾಡುವವನ ಶಬ್ದವನ್ನು ಕೇಳಿದೆನು. ಆ ಪುರುಷನು ನನ್ನ ಪಕ್ಕದಲ್ಲಿ ನಿಂತಿದ್ದನು.7ಮಾತನಾಡುವಾತನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ಇದು ನನ್ನ ಸಿಂಹಾಸನ, ನನ್ನ ಪಾದ ಪೀಠ, ಇಲ್ಲಿ ನಾನು ಇಸ್ರಾಯೇಲರ ಮಧ್ಯದಲ್ಲಿ ಸದಾ ವಾಸಿಸುವೆನು. ಇಸ್ರಾಯೇಲ್ ವಂಶದವರಾಗಲಿ, ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ, ಗತಿಸಿದ ಅರಸರ ಶವಗಳಿಂದಲೂ ನನ್ನ ಪರಿಶುದ್ಧ ನಾಮವನ್ನು ಅಪವಿತ್ರ ಮಾಡುವುದಿಲ್ಲ.8ನನ್ನ ಹೊಸ್ತಿಲುಗಳ ಪಕ್ಕದಲ್ಲಿ ತಮ್ಮ ಹೊಸ್ತಿಲುಗಳನ್ನು ಹಾಕಿಕೊಂಡು ನನ್ನ ಮನೆಗೂ, ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ಮೇಲೆ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡುವುದಿಲ್ಲ. ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡಿದರು. ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.9ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನ್ನಿಂದ ದೂರ ಮಾಡಲಿ. ಆಗ ನಾನು ಅದರ ಮಧ್ಯದಲ್ಲಿ ಸದಾ ವಾಸಿಸುವೆನು.>>ಪ್ರವಾದಿಗೆ ಕೊಟ್ಟ ಆಜ್ಞೆ
10<<ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ಆಲಯವನ್ನು ಅವರಿಗೆ ತೋರಿಸು ಮತ್ತು ಅವರು ಅದನ್ನು ಅಳತೆ ಮಾಡಲಿ.11ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ಆಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.12<<ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ.ಯಜ್ಞವೇದಿಯ ನಿರ್ಮಾಣಕ್ರಮ
13<<ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರ ಹೀಗಿರಬೇಕು. (ಉದ್ದ ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ) ಕೆಳಭಾಗದ ಎತ್ತರ ಒಂದು ಮೊಳ, ಮೇಲಿನ ಅಂಚಿನ ಅಗಲ ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಒಂದು ಗೇಣು; ಇದೇ ಯಜ್ಞವೇದಿಯ ಪೀಠ.14ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರ ಎರಡು ಮೊಳ, ಅದರ ಮೇಲಣ ಅಂಚಿನ ಅಗಲ ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರ ನಾಲ್ಕು ಮೊಳ, ಮೇಲಣ ಅಂಚಿನ ಅಗಲವು ಒಂದು ಮೊಳ.15ಯಜ್ಞವೇದಿಯ ಅಂತಸ್ತಿನ ಎತ್ತರವು ನಾಲ್ಕು ಮೊಳ; ಆ ಯಜ್ಞವೇದಿಯ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.16ಯಜ್ಞವೇದಿ ಹನ್ನೆರಡು ಮೊಳ ಉದ್ದವೂ, ಹನ್ನೆರಡು ಮೊಳ ಅಗಲವೂ ಮತ್ತು ಚಚ್ಚೌಕವಾಗಿರಬೇಕು.17ದೊಡ್ಡ ಅಂತಸ್ತು ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ, ನಾಲ್ಕು ಕಡೆಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಅರ್ಧ ಮೊಳ, ಕೆಳಭಾಗದ ಸುತ್ತಣ ಅಂಚಿನ ಅಗಲವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಅಭಿಮುಖವಾಗಿರಬೇಕು.>>ಯಜ್ಞವೇದಿಯ ಪ್ರತಿಷ್ಠೆ
18ಆಗ ಆ ಪುರುಷನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಸರ್ವಾಂಗಹೋಮಕ್ಕೂ, ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.19ಲೇವಿಯರೂ, ಚಾದೋಕನ ಸಂತಾನದವರೂ, ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷ ಪರಿಹಾರಕಯಜ್ಞಕ್ಕಾಗಿ ಕೊಡು ಇದು ಕರ್ತನಾದ ಯೆಹೋವನ ನುಡಿ.20ಆಮೇಲೆ ಅದರ ರಕ್ತದಲ್ಲಿ ಸ್ವಲ್ಪವನ್ನು ನೀನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ, ಸುತ್ತಣ ದಿಂಡಿಗೂ ಹಚ್ಚಿ, ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.21ಮತ್ತು ದೋಷ ಪರಿಹಾರಕಯಜ್ಞಕ್ಕಾಗಿ ವಧಿಸಲ್ಪಟ್ಟ ಹೋರಿಯನ್ನು ನೀನು ಒಪ್ಪಿಸಲು ನೇಮಿಸಲ್ಪಟ್ಟವನು, ಪವಿತ್ರಾಲಯದ ಹೊರಗೆ ಆಲಯಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ ಅದನ್ನು ಸುಡಬೇಕು.22<<ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು23ನೀನು ಯಜ್ಞವೇದಿಯ ಶುದ್ಧೀಕರಣದ ಕಾರ್ಯವನ್ನು ಮುಗಿಸಿದ ಮೇಲೆ, ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ತಂದು ಅರ್ಪಿಸಬೇಕು.24ನೀನು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು, ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ, ಯೆಹೋವನಿಗಾಗಿ ಸರ್ವಾಂಗಹೋಮವನ್ನು ಅರ್ಪಿಸಬೇಕು.25<<ಏಳು ದಿನಗಳ ತನಕ ನೀನು ಪ್ರತಿ ದಿನವೂ ದೋಷಪರಿಹಾರ ಬಲಿಗಾಗಿ ಒಂದೊಂದು ಹೋತವನ್ನು ಸಿದ್ಧಮಾಡಬೇಕು. ಯಾಜಕರು ಸಹ ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ಸಿದ್ಧಮಾಡಬೇಕು.26ಹೀಗೆ ಏಳು ದಿನ ಯಜ್ಞವೇದಿಯ ದೋಷವನ್ನು ಪರಿಹರಿಸುತ್ತಾ ಅದನ್ನು ಶುದ್ಧಿ ಮಾಡಿ ಪ್ರತಿಷ್ಠಿಸಬೇಕು.27ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು>> ಇದು ಕರ್ತನಾದ ಯೆಹೋವನ ನುಡಿ.
44ಪೂರ್ವದ್ವಾರದ ಪ್ರವೇಶ ನಿಷೇಧ
1ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ತಿರುಗಿ ಕರೆದುಕೊಂಡು ಬಂದನು. ಅದು ಮುಚ್ಚಲ್ಪಟ್ಟಿತ್ತು.2ಆಗ ಯೆಹೋವನು ನನಗೆ, <<ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದನ್ನು ತೆರೆಯಬಾರದು, ಇದರಿಂದ ಯಾರೂ ಪ್ರವೇಶಿಸಬಾರದು. ಇಸ್ರಾಯೇಲಿನ ದೇವರಾದ ಯೆಹೋವನು ಇದರಿಂದ ಪ್ರವೇಶಿಸಿದ್ದಾನೆ. ಆದುದರಿಂದ ಇದು ಮುಚ್ಚಿರಬೇಕು.3ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು>> ಎಂದು ಹೇಳಿದನು.ಲೇವಿಯರ ಕರ್ತವ್ಯ
4ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು.5ಆಗ ಯೆಹೋವನು ನನಗೆ ಹೀಗೆ ಹೇಳಿದನು, <<ನರಪುತ್ರನೇ, ಯೆಹೋವನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ ಮತ್ತು ಪವಿತ್ರಾಲಯದ ಪ್ರವೇಶವನ್ನೂ, ಪರಿಶುದ್ಧ ಸ್ಥಳದ ಪ್ರತಿಯೊಂದು ಹಾಗುಹೋಗುಗಳನ್ನೂ ಗಮನಿಸು.6ಇದಲ್ಲದೆ, ನೀನು ಆ ದ್ರೋಹಿಗಳಾದ ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ,7<ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.8ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.>9ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು.10<< <ಇಸ್ರಾಯೇಲರು ನನ್ನನ್ನು ತೊರೆದು, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ದೋಷಫಲವನ್ನು ಅನುಭವಿಸುವರು.11ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು.12ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆ ಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿಯಾದ ವಿಘ್ನವಾದುದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸಲೇಬೇಕು.> ಇದು ಕರ್ತನಾದ ಯೆಹೋವನ ನುಡಿ.13<ಅವರು ನನಗೆ ಯಾಜಕಸೇವೆ ಮಾಡುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ನನ್ನ ಅತಿ ಪವಿತ್ರವಾದ ಪರಿಶುದ್ಧ ವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ, ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.14ದೇವಾಲಯದ ಸಕಲ ಸೇವೆಯಲ್ಲಿಯೂ, ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.ಯಾಜಕರ ವಿಷಯವಾದ ವಿವಿಧ ನಿಯಮಗಳು
15<< <ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು> ಇದು ಕರ್ತನಾದ ಯೆಹೋವನ ನುಡಿ.16ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ, ನನ್ನ ಸೇವೆ ಮಾಡುವುದಕ್ಕೆ ನನ್ನ ಯಜ್ಞವೇದಿಯನ್ನು ಸಮೀಪಿಸಿ, ನನ್ನ ಆಲಯದ ಪಾರುಪತ್ಯವನ್ನು ವಹಿಸುವರು.17<<ಅವರು ಒಳಗಿನ ಅಂಗಳದ ಬಾಗಿಲುಗಳನ್ನು ಪ್ರವೇಶಿಸುವಾಗ, ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ, ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಬಾರದು.18ಅವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಒಳಉಡುಪನ್ನು ಹಾಕಿಕೊಂಡಿರಬೇಕು; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.19ಅವರು ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗುಲಿಸಿ, ಅವರನ್ನು ಪರಿಶುದ್ಧರನ್ನಾಗಿ ಮಾಡದಂತೆ. ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು, ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು.20<<ಅವರು ತಲೆಬೋಳಿಸಿಕೊಳ್ಳದೆ; ಕೂದಲನ್ನು ಬೆಳಸದೆ, ತಮ್ಮ ತಲೆ ಕೂದಲನ್ನು ಕತ್ತರಿಸಬೇಕು.21ಒಳಗಿನ ಅಂಗಳವನ್ನು ಪ್ರವೇಶಿಸುವಾಗ, ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿಯಬಾರದು.22ಯಾಜಕರು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆ ಮಾಡಿಕೊಳ್ಳಬಹುದು.23ಅವರು ನನ್ನ ಜನರಿಗೆ ಪವಿತ್ರವಾದದ್ದಕ್ಕೂ ಮತ್ತು ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧ ಹಾಗೂ ಅಶುದ್ಧಗಳ ಭೇದವನ್ನು ತಿಳಿಸಲಿ.24ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.25<<ಸತ್ತವರ ಹೆಣವನ್ನು ಸಮೀಪಿಸಿ, ತಮ್ಮನ್ನು ಅಪವಿತ್ರ ಮಾಡಿಕೊಳ್ಳಬಾರದು; ಆದರೆ ಸತ್ತ ತಂದೆ, ತಾಯಿ, ಮಗನು, ಮಗಳು, ತಮ್ಮ, ಮದುವೆಯಿಲ್ಲದ ತಂಗಿ, ಇವರಿಗೋಸ್ಕರ ಒಬ್ಬನು ತನ್ನನ್ನು ಅಪವಿತ್ರ ಮಾಡಿಕೊಳ್ಳಬಹುದು.26ಅಂಥವನನ್ನು ಶುದ್ಧನಾದ ಮೇಲೂ, ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು.27ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ, ಒಳಗಿನ ಅಂಗಳಕ್ಕೆ ಸೇರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು.>> ಇದು ಕರ್ತನಾದ ಯೆಹೋವನ ನುಡಿ.28<<ಅವರಿಗೆ ಇದು ಸ್ವಾಸ್ತ್ಯವಾಗುವುದು, ನಾನೇ ಅವರ ಸ್ವತ್ತು; ಇಸ್ರಾಯೇಲಿನಲ್ಲಿ ಅವರಿಗೆ ಯಾವ ಆಸ್ತಿಯನ್ನೂ ಕೊಡಬಾರದು; ನಾನೇ ಅವರಿಗೆ ಆಸ್ತಿ.29ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕ ಯಜ್ಞದ್ರವ್ಯವನ್ನೂ, ಪ್ರಾಯಶ್ಚಿತ್ತ ಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲರಲ್ಲಿ ಹರಕೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.30<<ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದನ್ನು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.31ಯಾಜಕರು ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಅಥವಾ ಪಶುವನ್ನಾಗಲಿ ತಿನ್ನಬಾರದು.>>
45ದೇವರಿಗೆ ಮೀಸಲು ಭೂಮಿ
1ನೀವು ದೇಶವನ್ನು ಸ್ವತ್ತಾಗಿ ಹಂಚುವಾಗ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಬೇಕು. ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ ಇರಲಿ. ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.2ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಅದರ ಸುತ್ತಲೂ ಐವತ್ತು ಮೊಳ ಅಗಲವಾದ ಭೂಮಿಯು ಇರುವುದು.3ಮೊದಲು ಅಳೆದ ಕ್ಷೇತ್ರದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು. ಇದರಲ್ಲಿ ಪರಿಶುದ್ಧವಾದ ಪವಿತ್ರಾಯಲವು ಇರಬೇಕು.4ಇದು ದೇಶದಲ್ಲಿ ಪರಿಶುದ್ಧ ಭಾಗವೂ; ಯೆಹೋವನಿಗೆ ಸೇವೆ ಮಾಡಲು ಸಮೀಪಿಸುವಂತೆ, ಇದು ಪರಿಶುದ್ಧ ಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ, ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿಯೂ ಇರುವುದು.5ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಇಪ್ಪತ್ತೈದು ಸಾವಿರ ಮೊಳ ಉದ್ದವೂ ಮತ್ತು ಹತ್ತು ಸಾವಿರ ಮೊಳ ಅಗಲದ ಕ್ಷೇತ್ರವು ಅವರಿಗೆ ಸ್ವಾಸ್ತ್ಯವಾಗುವುದು.6ನೀವು ನನಗೆ ಸಮರ್ಪಿಸುವ ಪರಿಶುದ್ಧ ಭಾಗದ ಪಕ್ಕದಲ್ಲಿ ಐದು ಸಾವಿರ ಮೊಳ ಅಗಲದ, ಇಪ್ಪತ್ತೈದು ಸಾವಿರ ಮೊಳ ಉದ್ದದ ಕ್ಷೇತ್ರವನ್ನು ಪಟ್ಟಣಕ್ಕೆ ಒಳಪಟ್ಟ ಭೂಮಿಯನ್ನಾಗಿ ನೇಮಿಸಬೇಕು. ಅದರಲ್ಲಿ ಇಸ್ರಾಯೇಲ್ ವಂಶದವರಿಗೆಲ್ಲಾ ಹಕ್ಕಿರುವುದು.ರಾಜನ ಸ್ವತ್ತು
7ರಾಜನ ಸ್ವತ್ತು ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರಕ್ಕೂ, ಪಟ್ಟಣಕ್ಕೆ ಒಳಪಟ್ಟ ಭೂಮಿಗೂ ಎರಡು ಕಡೆಗಳಲ್ಲಿರುವುದು; ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಪಶ್ಚಿಮ ಕಡೆಯಲ್ಲಿ ಹರಡುವುದು, ಪೂರ್ವದಿಂದ ಪೂರ್ವಕ್ಕೂ ಹರಡುವುದು, ಅದರ ಉದ್ದವು ಪಶ್ಚಿಮದಿಂದ ಪೂರ್ವಕ್ಕೂ ಒಂದು ಕುಲದ ಸ್ವತ್ತಿನ ಉದ್ದಕ್ಕೆ ಸರಿಸಮಾನವಾಗಿರುವುದು.8ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವುದು; ಇನ್ನು ಮೇಲೆ ನನ್ನ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸುವುದಿಲ್ಲ; ದೇಶದ ಭೂಮಿಯನ್ನು ಇಸ್ರಾಯೇಲರಿಗೆ ಕುಲಕ್ಕೆ ತಕ್ಕಂತೆ ಹಂಚುವರು.ರಾಜನ ಕರ್ತವ್ಯ
9ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ, ನೀತಿನ್ಯಾಯಗಳನ್ನು ನಡೆಸಿರಿ. ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ. ಇದು ಕರ್ತನಾದ ಯೆಹೋವನ ನುಡಿ.10ನಿಮ್ಮ ತಕ್ಕಡಿಯೂ, ಧಾನ್ಯದ ಅಳತೆಯೂ, ರಸದ್ರವ್ಯದ ಅಳತೆಯೂ ನ್ಯಾಯವಾಗಿಯೇ ಇರಬೇಕು.11ಏಫಾ (ಧಾನ್ಯದ ಅಳತೆ) ಮತ್ತು ಬತ್ (ರಸದ್ರವ್ಯದ ಅಳತೆ) ಒಂದೇ ಪ್ರಮಾಣವಾಗಿರಬೇಕು. ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಏಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು.12ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ತೊಲಾ ತೂಕದ್ದಾಗಿರಲಿ.>>13ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯನೈವೇದ್ಯವನ್ನೂ, ಸರ್ವಾಂಗಹೋಮವನ್ನೂ, ಸಮಾಧಾನಯಜ್ಞವನ್ನೂ ಮಾಡುವುದಕ್ಕೋಸ್ಕರ ಸಮರ್ಪಿಸತಕ್ಕದು ಏನೆಂದರೆ ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು.14ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ ಒಂದು ಕೋರ್ ಅಂದರೆ ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು. (ಹತ್ತು ಬತ್ ಅಂದರೆ ಒಂದು ಹೋಮೆರ್)15ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ; ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಸರ್ವಾಂಗಹೋಮ ಮತ್ತು ಸಮಾಧಾನಬಲಿಯಾಗಿ ಒಪ್ಪಿಸಬೇಕು>> ಇದು ಕರ್ತನಾದ ಯೆಹೋವನ ನುಡಿ.16ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಈ ಕಾಣಿಕೆಯನ್ನು ಒಪ್ಪಿಸತಕ್ಕದ್ದು.17ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.ಪಸ್ಕ ಮತ್ತು ಪರ್ಣಶಾಲೆ ಹಬ್ಬಗಳ ಬಲಿಗಳು
18ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀವು ಪೂರ್ಣಾಂಗವಾದ ಹೋರಿಯನ್ನು ಆರಿಸಿಕೊಂಡು ಪವಿತ್ರಾಲಯವನ್ನು ಶುದ್ಧೀಕರಿಸಬೇಕು.19ಆಗ ಯಾಜಕನು ಆ ದೋಷಪರಿಹಾರಕ ಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ, ಯಜ್ಞವೇದಿಯ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಹೆಬ್ಬಾಗಿಲಿನ ಕಂಬಗಳಿಗೂ ಹಚ್ಚಬೇಕು.20ಅದೇ ಮೇರೆಗೆ ಏಳನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ, ಯಾರಾದರೂ ಆಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.21<<ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿನದಲ್ಲಿ, ಏಳು ದಿನದ ಪಸ್ಕಹಬ್ಬವನ್ನು ಆಚರಿಸಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.22ಆ ದಿನದಲ್ಲಿ ಪ್ರಭುವು ತನ್ನ ನಿಮಿತ್ತವೂ, ದೇಶದ ಜನರೆಲ್ಲರ ನಿಮಿತ್ತವೂ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನು ಒಪ್ಪಿಸಲಿ.23ಹಬ್ಬದ ಏಳು ದಿನಗಳಲ್ಲಿಯೂ ಯೆಹೋವನಿಗೆ ಸಮರ್ಪಿಸತಕ್ಕ ಸರ್ವಾಂಗಹೋಮಕ್ಕಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಪೂರ್ಣಾಂಗವಾದ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಒದಗಿಸಲಿ ಮತ್ತು ದೋಷಪರಿಹಾರಕ ಯಜ್ಞವಾಗಿ ಪ್ರತಿ ದಿನವೂ ಒಂದು ಹೋತವನ್ನು ಕೊಡಲಿ.24ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಸೇರು ಗೋದಿಹಿಟ್ಟನ್ನೂ, ಆರಾರು ಸೇರು ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒಪ್ಪಿಸಬೇಕು.25<<ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿನಗಳಲ್ಲಿಯೂ ಅವನು ದೋಷಪರಿಹಾರಕ ಯಜ್ಞಪಶು, ಸರ್ವಾಂಗಹೋಮ ಪಶು, ಧಾನ್ಯನೈವೇದ್ಯ ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.>>
46ಸಬ್ಬತ್ತಿನ ಮತ್ತು ಹಬ್ಬದ ಆಚರಣೆ
1ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.2ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.3ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ ದೇಶದ ಜನರು ಆ ಹೆಬ್ಬಾಗಿಲಿನ ದ್ವಾರದ ಮುಂದೆ ಯೆಹೋವನ ಸಮ್ಮುಖವಾಗಿ ಅಡ್ಡಬೀಳಲಿ.4ಸಬ್ಬತ್ ದಿನದಲ್ಲಿ ಅರಸನು ಯೆಹೋವನಿಗೆ ಪೂರ್ಣಾಂಗವಾದ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಅರ್ಪಿಸತಕ್ಕದ್ದು.5ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ, ಕುರಿಗಳೊಡನೆ ಕೈಯಲಾದಷ್ಟು ಗೋದಿಹಿಟ್ಟನ್ನೂ, ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.6ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ, ಆರು ಕುರಿಗಳನ್ನೂ, ಒಂದು ಟಗರನ್ನೂ ಒಪ್ಪಿಸತಕ್ಕದ್ದು. ಅವು ಪೂರ್ಣಾಂಗವಾಗಿಯೇ ಇರಬೇಕು.7ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.ದೇವಾಲಯದ ಆಗಮನ ನಿರ್ಗಮನದ ಕ್ರಮ, ವಿವಿಧ ನಿಯಮಗಳು
8<<ಅರಸನು ಪ್ರವೇಶ ಮಾಡುವಾಗ ಹೆಬ್ಬಾಗಿಲಿನ ಕೈಸಾಲೆಯ ಮಾರ್ಗವಾಗಿ ಒಳಗೆ ಬಂದು, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.9ದೇಶದ ಜನರಾದರೋ ಹಬ್ಬಗಳಲ್ಲಿ ಯೆಹೋವನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿನಿಂದ ಆರಾಧಿಸುವುದಕ್ಕೆ ಪ್ರವೇಶಿಸಿದವನು ದಕ್ಷಿಣ ಬಾಗಿಲಿಂದ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನಿಂದ ಪ್ರವೇಶಿಸಿದವನು ಉತ್ತರ ಬಾಗಿಲಿನಿಂದ ಹೊರಗೆ ಹೋಗಬೇಕು. ತಾನು ಪ್ರವೇಶಿಸಿದ ಬಾಗಿಲಿನಿಂದ ಹಿಂದಿರುಗದೆ ಅದಕ್ಕೆ ಎದುರಾಗಿರುವ ಬಾಗಿಲಿಂದ ಹೊರಗೆ ಹೋಗಬೇಕು.10ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ.11ಅರಸನು ಉತ್ಸವಗಳಲ್ಲಿಯೂ, ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ, ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.12ಅರಸನು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ಸರ್ವಾಂಗಹೋಮವನ್ನಾಗಲಿ, ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸುವಾಗ ಅವನಿಗಾಗಿ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ತೆರೆಯಬೇಕು. ಅವನು ಸಬ್ಬತ್ ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ. ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.ನಿತ್ಯಸರ್ವಾಂಗಹೋಮ
13<<ನೀನು ಪೂರ್ಣಾಂಗವಾದ ವರ್ಷದ ಕುರಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಪ್ರತಿ ದಿನ ಅರ್ಪಿಸಬೇಕು. ಪ್ರತಿ ದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.14ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.15ಯಾಜಕರು ಕುರಿಯನ್ನೂ, ಧಾನ್ಯನೈವೇದ್ಯವನ್ನೂ, ಎಣ್ಣೆಯನ್ನೂ ನಿತ್ಯ ಸರ್ವಾಂಗಹೋಮವಾಗಿ ಪ್ರತಿ ದಿನ ಬೆಳಗ್ಗೆ ಸಮರ್ಪಿಸಬೇಕು.>>ಅರಸನ ಸ್ವತ್ತು ಪರಾಧೀನವಾಗಬಾರದು
16ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ಅರಸನು ತನ್ನ ಮಕ್ಕಳಲ್ಲಿ ಒಬ್ಬನಿಗೆ ದಾನ ಕೊಟ್ಟರೆ, ಅದು ತಂದೆಯ ಸ್ವಾಸ್ತ್ಯವಾದ ಕಾರಣ, ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸ್ವಾಸ್ತ್ಯವೇ.17ಆದರೆ ಅರಸನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನ ಮಾಡಿದರೆ, ಬಿಡುಗಡೆಯ ವರ್ಷದವರೆಗೆ ಅದು ಅವನ ಅಧೀನವಾಗಿರುವುದು; ಆ ಮೇಲೆ ಅದು ಪುನಃ ಅರಸನ ವಶವಾಗುವುದು; ಆದರೆ ಅರಸನು ತನ್ನ ಮಕ್ಕಳಿಗೆ ಕೊಟ್ಟ ಸ್ವತ್ತು ಅವರಿಗೇ ಸೇರುವುದು.18ಇದಲ್ಲದೆ ಅರಸನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ. ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗುವನು.ದೇವಾಲಯದ ಪಾಕಶಾಲೆಗಳು
19<<ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖವಾಗಿಯೂ, ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.>>20ಆಗ ಅವನು ನನಗೆ, <<ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ>> ಎಂದು ಹೇಳಿದನು.21ತರುವಾಯ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಬರಮಾಡಿ, ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರೆದುಕೊಂಡು ಹೋದನು. ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು.22ಹೌದು, ಅಂಗಳದ ನಾಲ್ಕು ಮೂಲೆಗಳಲ್ಲಿಯೂ ನಲ್ವತ್ತು ಮೊಳ ಉದ್ದದ, ಮೂವತ್ತು ಮೊಳ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.23ಅವುಗಳೊಳಗೆ ಸುತ್ತಲು, ಅಂದರೆ ಆ ನಾಲ್ಕು ಅಂಗಳಗಳ ಸುತ್ತು ಮುತ್ತಲು ಕಲ್ಲಿನ ಸಾಲುಗಳು ಚಾಚಿಕೊಂಡಿತು. ಆ ಸಾಲುಗಳ ಕೆಳಗೆ ಒಲೆಗಳು ಸುತ್ತಲೂ ಇದ್ದವು.24ಆಗ ಅವನು ನನಗೆ, <<ಇವು ದೇವಾಲಯದ ಸೇವಕರು. ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸಿದ ಪಾಕಶಾಲೆಗಳು>> ಎಂದು ಹೇಳಿದನು.
47ದೇವಸ್ಥಾನದಿಂದ ಹೊರಡುವ ಪ್ರವಾಹ
1ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.2ಆಗ ಅವನು ನನ್ನನ್ನು ಉತ್ತರದಿಕ್ಕಿನ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಕೊಂಡು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಕರೆದು ತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲನೆ ಹರಿಯುವ ನೀರು ಕಾಣಿಸಿತು.3ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವಕ್ಕೆ ಮುಂದುವರಿದು ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸಿದನು. ಅಲ್ಲಿ ನೀರು ಕಾಲು ಮುಳುಗುವಷ್ಟಿತ್ತು.4ಅವನು ತಿರುಗಿ ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ತಿರುಗಿ ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ಆ ನೀರು ಸೊಂಟದವರೆಗೆ ಇತ್ತು.5ಅವನು ಮತ್ತೆ ಸಾವಿರ ಮೊಳ ಅಳೆದನು. ಅದು ನನ್ನಿಂದ ದಾಟಲಾಗದ ನದಿಯಾಗಿತ್ತು; ನೀರು ಆಳವಾಗಿ ಈಜಾಡುವಷ್ಟು ಪ್ರವಾಹವಾಗಿತ್ತು, ದಾಟಲಾಗದ ನದಿಯಾಗಿತ್ತು.6ಆಗ ಅವನು ನನಗೆ, <<ನರಪುತ್ರನೇ, ಇದನ್ನು ನೋಡಿದೆಯಾ?>> ಎಂದು ಹೇಳಿ ನನ್ನನ್ನು ನದಿಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು.7ನಾನು ಹಿಂದಿರುಗಲು ಆಹಾ, ನದಿಯ ಎರಡು ದಡಗಳಲ್ಲಿಯೂ ಅನೇಕ ವೃಕ್ಷಗಳು ಕಾಣಿಸಿದವು.8ಆಗ ಅವನು ನನಗೆ ಹೀಗೆ ಹೇಳಿದನು, <<ಈ ಪ್ರವಾಹವು ಪೂರ್ವ ಪ್ರಾಂತ್ಯಕ್ಕೆ ಹೊರಟು, ಅರಾಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು. ಈ ನೀರು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.9ಈ ನದಿಯು ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲ ವಿಧವಾದ ಜಲಜಂತುಗಳು ಬದುಕಿ ಬಾಳುವವು; ಮೀನುಗಳು ಗುಂಪು ಗುಂಪಾಗಿರುವವು. ಈ ನೀರು ಸಮುದ್ರಕ್ಕೆ ಬೀಳಲು, ಆ ನೀರೂ ಸಿಹಿಯಾಗುವುದು. ಈ ನದಿಯು ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.10ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್ ಗೆದಿಯಿಂದ ಏನ್ ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆ ಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿ ರಾಶಿಯಾಗಿ ಸಿಕ್ಕುವವು.11ಆದರೆ ಅದರ ಸುತ್ತಣ ಕೆಸರಾದ ಸ್ಥಳಗಳು, ಕೊಳಚೆಗಳು ಸಿಹಿಯಾಗುವುದಿಲ್ಲ. ಅವು ಉಪ್ಪಿನ ಗಣಿಯಾಗುವುವು.12ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.>>ಇಸ್ರಾಯೇಲ್ ದೇಶದ ಮೇರೆಗಳು
13ಕರ್ತನಾದ ಯೆಹೋವನು ಇಂತೆನ್ನುತ್ತಾನೆ, <<ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡು ಪಾಲು ಸೇರಲಿ.14ನಾನು ನಿಮ್ಮ ಪೂರ್ವಿಕರಿಗೆ ಪ್ರಮಾಣವಾಗಿ ವಾಗ್ದಾನ ಮಾಡಿದ ಈ ದೇಶವನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸುವಿರಿ. ಇದು ನಿಮಗೆ ಸ್ವತ್ತಾಗಿಯೇ ಇರುವುದು.15<<ನಿಮ್ಮ ದೇಶದ ಮೇರೆಗಳು ಹೀಗಿರಬೇಕು, ಉತ್ತರದ ಮೇರೆಯು ಮಹಾ ಸಮುದ್ರದಿಂದ ಆರಂಭವಾಗಿ ಹೆತ್ಲೋನಿನ ಮಾರ್ಗವಾಗಿ ಚೆದಾದಿಗೆ ಸೇರುವುದು.16ಹಮಾತ್, ಬೇರೋತ, ದಮಸ್ಕದವರೆಗೂ ಹಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.17ಹೀಗೆ ಉತ್ತರ ಮೇರೆಯು ಸಮುದ್ರದಿಂದ ದಮಸ್ಕದ ಮೇರೆಯ ಹಚರ್ ಐನೋನಿನವರೆಗೆ ಹಬ್ಬುವುದು. ಅದರ ಉತ್ತರದಲ್ಲಿ ಹಮಾತಿನ ಪ್ರಾಂತ್ಯವಿರುವುದು.18<<ಇದು ಪೂರ್ವದಿಕ್ಕಿನ ಮೇರೆಯಾಗಿದೆ: ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯದಲ್ಲಿರುವ ಯೊರ್ದನ್ ಹೊಳೆಯು ಮೇರೆಯಾಗಿರುವುದು. ಉತ್ತರ ಮೇರೆಯಿಂದ ದಕ್ಷಿಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು.19ಇದು ದಕ್ಷಿಣದ ಮೇರೆಯಾಗಿದೆ: ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು, ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ ಐಗುಪ್ತದವರೆಗೆ ಮುಂದುವರೆಯುವ ನದಿಯ ಮಾರ್ಗವಾಗಿ ಮಹಾ ಸಮುದ್ರವನ್ನು ಮುಟ್ಟಬೇಕು.20ಇದು ಪಶ್ಚಿಮದ ಮೇರೆಯಾಗಿದೆ. ಹಮಾತಿನ ದಾರಿಗೆ ಎದುರಿನ (ಕರಾವಳಿಯ) ತನಕ ಮಹಾ ಸಮುದ್ರದವರೆಗೂ ಪಶ್ಚಿಮದ ಮೇರೆಯಾಗಿರುವುದು.21ಈ ರೀತಿಯಾಗಿ ದೇಶವನ್ನು ನೀವು ಇಸ್ರಾಯೇಲಿನ ಎಲ್ಲಾ ಕುಲಕ್ಕೂ ಹಂಚಿಕೊಳ್ಳಬೇಕು.22ನಿಮಗೂ, ನಿಮ್ಮ ಮಧ್ಯದಲ್ಲಿ ಪ್ರವಾಸ ಮಾಡುತ್ತಾ, ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು. ಅವರು ಇಸ್ರಾಯೇಲರ ಮಧ್ಯದಲ್ಲಿ ನಿಮಗೆ ಸ್ವದೇಶಿಗಳಂತೆಯೇ ಇರಬೇಕು. ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.23ಯಾವ ಕುಲದಲ್ಲಿ ವಿದೇಶಿಯು ಪ್ರವಾಸವಾಗಿರುತ್ತಾನೋ ಅಲ್ಲಿ ಅವನಿಗೆ ಸ್ವತ್ತನ್ನು ಕೊಡಬೇಕು>> ಇದು ಕರ್ತನಾದ ಯೆಹೋವನ ನುಡಿ.
48ದೇಶದ ಹಂಚುವಿಕೆ
1ಹಂಚುವಿಕೆಯನ್ನು ಅನುಸರಿಸಿ ಕುಲಗಳ ಹೆಸರುಗಳು ಇವೇ. ದೇಶದ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನ್ ಕುಲಕ್ಕೆ ಒಂದು ಭಾಗವಿದೆ. ಅದರ ಉತ್ತರ ಮೇರೆಯು ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು, ಹಮಾತಿನ ದಾರಿಯನ್ನು ದಾಟಿ, ದಮಸ್ಕದ ಮೇರೆಯಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು. ಅದರ ಕಡೆಗಳು ದೇಶದ ಪೂರ್ವ, ಪಶ್ಚಿಮಗಳ ಮೇರೆಗಳ ತನಕ ಚಾಚಿಕೊಂಡಿರುವವು.2ದಾನಿನ ದಕ್ಷಿಣ ದಿಕ್ಕಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಆಶೇರಿಗೆ ಒಂದು ಪಾಲು.3ಆಶೇರಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನಫ್ತಾಲಿಗೆ ಒಂದು ಪಾಲು.4ನಫ್ತಾಲಿಯ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಮನಸ್ಸೆಗೆ ಒಂದು ಪಾಲು.5ಮನಸ್ಸೆಯ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಎಫ್ರಾಯೀಮಿಗೆ ಒಂದು ಪಾಲು.6ಎಫ್ರಾಯೀಮಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ರೂಬೇನಿಗೆ ಒಂದು ಪಾಲು.7ರೂಬೇನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಯೆಹೂದಕ್ಕೆ ಒಂದು ಪಾಲು.8ಯೆಹೂದದ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವುದು. ಅದರ ಅಗಲವು ಇಪ್ಪತ್ತೈದು ಸಾವಿರ ಮೊಳ ಉದ್ದವು, ಪೂರ್ವದಿಂದ ಪಶ್ಚಿಮ ಕುಲಗಳ ಪಾಲುಗಳ ಉದ್ದಕ್ಕೆ ಸಮಾನವಾಗಿದೆ. ಅದರ ಮಧ್ಯದಲ್ಲಿ ಪವಿತ್ರಾಲಯವಿರುವುದು.9ನೀವು ಮೀಸಲು ಭೂಮಿಯಲ್ಲಿ ಯೆಹೋವನಿಗೆ ವಿಶೇಷವಾದ ಮೀಸಲಾಗಿ ಸಮರ್ಪಿಸುವ ಪಾಲಿನ ಉದ್ದವು ಇಪ್ಪತ್ತೈದು ಸಾವಿರ ಮೊಳವು ಮತ್ತು ಅಗಲವು ಹತ್ತು ಸಾವಿರ ಮೊಳವಾಗಿದೆ.10ಮೀಸಲಾದ ಆ ಪವಿತ್ರ ಕ್ಷೇತ್ರವು ಯಾಜಕರಿಗೆ ಸಲ್ಲತಕ್ಕದ್ದು. ಉತ್ತರಕ್ಕೆ ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳವು, ಪಶ್ಚಿಮಕ್ಕೆ ಹತ್ತು ಸಾವಿರ ಮೊಳ ಅಗಲವು, ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿದೆ. ಅದರ ಮಧ್ಯದಲ್ಲಿ ಯೆಹೋವನ ಪವಿತ್ರಾಲಯವಿರುವುದು.11ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ, ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.12ಲೇವಿಯರ ಪಾಲಿನ ಮೇರೆಯ ಪಕ್ಕದಲ್ಲಿರುವ ಆ ಕ್ಷೇತ್ರವು ಅತಿ ಪವಿತ್ರವೂ ದೇಶದೊಳಗೆ ಮೀಸಲೂ ಆಗಿ ಯಾಜಕರಿಗೆ ಸೇರತಕ್ಕದ್ದಾಗಿದೆ.13ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಮೇರೆಯ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು. ಈ ಎರಡು ಪಾಲುಗಳ ಒಟ್ಟು ಅಳತೆ ಎಷ್ಟೆಂದರೆ ಉದ್ದವು ಇಪ್ಪತ್ತೈದು ಸಾವಿರ ಮೊಳ ಮತ್ತು ಅಗಲವು ಇಪ್ಪತ್ತು ಸಾವಿರ ಮೊಳವಾಗಿದೆ.14ಆ ಕ್ಷೇತ್ರವು ಯೆಹೋವನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು ಮತ್ತು ಬದಲಾಯಿಸಲೂಬಾರದು. ದೇಶದ ಆ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವನಿಗೆ ಪರಿಶುದ್ಧವಾಗಿದೆ.15ಇಪ್ಪತ್ತೈದು ಸಾವಿರ ಮೊಳ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ ಮೀಸಲು ಪಾಲಿನ ಒಟ್ಟು ಅಳತೆಯಲ್ಲಿ ಉಳಿದ ಐದು ಸಾವಿರ ಮೊಳ ಅಗಲದ ಭೂಮಿಯು ಮೀಸಲಿಲ್ಲವೆಂದೆಣಿಸಿ ಪಟ್ಟಣಕ್ಕೆ ಅಂದರೆ ಜನರ ನಿವಾಸಕ್ಕೂ ಮತ್ತು ಸುತ್ತಣ ಪ್ರದೇಶಕ್ಕೂ ಪ್ರತ್ಯೇಕಿಸಲ್ಪಡಲಿ. ಪಟ್ಟಣವು ಅದರ ಮಧ್ಯದಲ್ಲಿರಲಿ.16ಪಟ್ಟಣದ ಅಳತೆಯು ಹೀಗಿರಬೇಕು: ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಮೊಳವು, ದಕ್ಷಿಣದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಮೊಳವು; ಪೂರ್ವದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಮೊಳವು ಮತ್ತು ಪಶ್ಚಿಮಕ್ಕೆ ನಾಲ್ಕು ಸಾವಿರದ ಐನೂರು ಮೊಳವು ಇರಬೇಕು.17ಪಟ್ಟಣಕ್ಕೆ ಸುತ್ತಣ ಪ್ರದೇಶವಿರಬೇಕು. ಅದರ ಅಗಲವು ಉತ್ತರದಲ್ಲಿ ಇನ್ನೂರೈವತ್ತು ಮೊಳವು, ದಕ್ಷಿಣದಲ್ಲಿ ಇನ್ನೂರೈವತ್ತು ಮೊಳವು, ಪೂರ್ವದಲ್ಲಿ ಇನ್ನೂರೈವತ್ತು ಮೊಳವು ಮತ್ತು ಪಶ್ಚಿಮದಲ್ಲಿ ಇನ್ನೂರೈವತ್ತು ಮೊಳವು ಇರಬೇಕು.18ಪಟ್ಟಣವನ್ನು ಹೊರತುಪಡಿಸಿ, ಅದಕ್ಕೆ ಒಳಪಟ್ಟ ಉಳಿದ ಭೂಮಿಯ ಉದ್ದವು ಮೀಸಲಾದ ಪವಿತ್ರ ಕ್ಷೇತ್ರದ ಪಕ್ಕದಲ್ಲಿ ಪೂರ್ವದ ಕಡೆಗೆ ಹತ್ತು ಸಾವಿರ ಮೊಳವು, ಪಶ್ಚಿಮದ ಕಡೆಗೆ ಹತ್ತು ಸಾವಿರ ಮೊಳವು ಆಗಿರಬೇಕು. ಆ ಭೂಮಿಯು ಮೀಸಲಾದ ಪವಿತ್ರ ಕ್ಷೇತ್ರದ ಮೇರೆಯನ್ನು ಅನುಸರಿಸುವುದು. ಅದರ ಉತ್ಪತ್ತಿಯು ಆ ಪಟ್ಟಣದ ನಿವಾಸಿಗಳಿಗೆ ಆಹಾರವಾಗುವುದು.19ಅವರು ಇಸ್ರಾಯೇಲಿನ ಯಾವ ಕುಲಕ್ಕೆ ಸೇರಿದ್ದರೂ, ಪಟ್ಟಣದಲ್ಲಿ ವಾಸಿಸುತ್ತಾ ಆ ಭೂಮಿಯನ್ನು ಬಿತ್ತುವರು.20ಮೀಸಲಾದ ಪೂರ್ಣ ಕ್ಷೇತ್ರದ ಉದ್ದ ಇಪ್ಪತ್ತೈದು ಸಾವಿರ ಮೊಳವು, ಅಗಲ ಇಪ್ಪತ್ತೈದು ಸಾವಿರ ಮೊಳ ಮತ್ತು ನೀವು ಮೀಸಲಾಗಿ ಅರ್ಪಿಸುವ ಪವಿತ್ರ ಕ್ಷೇತ್ರವು ಪಟ್ಟಣಕ್ಕೆ ಒಳಪಟ್ಟು, ಭೂಮಿ ಸಹಿತವಾಗಿ ಚಚ್ಚೌಕವಾಗಿರಬೇಕು.21ಮೀಸಲಾದ ಪವಿತ್ರ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಎರಡು ಕಡೆಗಳಲ್ಲಿ ಉಳಿದ ಭೂಮಿಯು ಅರಸನ ಪಾಲಾಗಿರಲಿ. ಆ ಪಾಲು ಮೀಸಲಾದ ಕ್ಷೇತ್ರದ ಪೂರ್ವದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯ ಪಶ್ಚಿಮದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯೂ ಕುಲಗಳ ಪಾಲಿನಷ್ಟು ಉದ್ದವಾಗಿ ಹಬ್ಬುವುದು; ಅದು ಪ್ರಭುವಿಗೆ ಸೇರತಕ್ಕದ್ದು. ಪವಿತ್ರಾಲಯವೂ ಮೀಸಲಾದ ಪವಿತ್ರ ಕ್ಷೇತ್ರದ ಮಧ್ಯದಲ್ಲಿರುವುದು.22ಅರಸನ ಪಾಲಿನ ಎರಡು ಭಾಗಗಳ ಮಧ್ಯದಲ್ಲಿ ಲೇವಿಯರ ಪಾಲಿನ (ಬಡಗಣ) ಮೇರೆಯಿಂದ ಪಟ್ಟಣಕ್ಕೆ ಒಳಪಟ್ಟ ಭೂಮಿಯ (ತೆಂಕಣ) ಮೇರೆಯ ತನಕ ಅಂದರೆ ಯೆಹೂದದ (ತೆಂಕಣ) ಮೇರೆಯಿಂದ ಬೆನ್ಯಾಮೀನಿನ (ಬಡಗಣ) ಮೇರೆಯವರೆಗೆ ಅರಸನ ಪಾಲು ಹರಡಿರುವುದು.23ಉಳಿದ ಕುಲಗಳ ಪಾಲಿನ ಕ್ರಮವೇನೆಂದರೆ, ಪೂರ್ವದಿಂದ ಪಶ್ಚಿಮದ ತನಕ ಬೆನ್ಯಾಮೀನಿಗೆ ಒಂದು ಪಾಲು.24ಬೆನ್ಯಾಮೀನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಸಿಮೆಯೋನಿಗೆ ಒಂದು ಪಾಲು.25ಸಿಮೆಯೋನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಇಸ್ಸಾಕಾರಿಗೆ ಒಂದು ಪಾಲು.26ಇಸ್ಸಾಕಾರಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಜೆಬುಲೂನಿಗೆ ಒಂದು ಪಾಲು.27ಜೆಬುಲೂನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಗಾದಿಗೆ ಒಂದು ಪಾಲು.28ಗಾದನ್ ಮೇರೆಯು ದಕ್ಷಿಣದ ಕಡೆಯಲ್ಲಿ, ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ, (ಐಗುಪ್ತದ ಮುಂದಣ) ನದಿಯ ಮಾರ್ಗವಾಗಿ ಮಹಾ ಸಮುದ್ರಕ್ಕೆ ಸೇರುವುದು.29ನೀವು ಇಸ್ರಾಯೇಲಿನ ಕುಲಗಳಿಗೆ ಸ್ವತ್ತಾಗಿ ಹಂಚಿ ಕೊಡಬೇಕಾದ ದೇಶವು ಇದೇ. ಕುಲಗಳ ಪಾಲುಗಳು ಇವೇ. ಇದು ಕರ್ತನಾದ ಯೆಹೋವನ ನುಡಿ.ಯೆರೂಸಲೇಮಿನ ಪ್ರವೇಶದ್ವಾರಗಳು
30ಪಟ್ಟಣದ ನಿರ್ಗಮನ ಹೀಗಿರಬೇಕು: ಉತ್ತರದ ಕಡೆಯ ಉದ್ದ ನಾಲ್ಕು ಸಾವಿರದ ಐನೂರು ಮೊಳವಾಗಿದೆ.31ಪಟ್ಟಣದ ಬಾಗಿಲುಗಳಿಗೆ ಇಸ್ರಾಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಉತ್ತರಕ್ಕೆ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ ಬಾಗಿಲು, ಮತ್ತೊಂದು ಲೇವಿಯರ ಬಾಗಿಲು.32ಪೂರ್ವದ ಕಡೆಯ ಉದ್ದವು ನಾಲ್ಕು ಸಾವಿರದ ಇನ್ನೂರು ಮೊಳವಾಗಿದೆ; ಅದರಲ್ಲಿ ಮೂರು ಬಾಗಿಲುಗಳು; ಒಂದು ಯೋಸೇಫನ ಬಾಗಿಲು; ಇನ್ನೊಂದು ಬೆನ್ಯಾಮೀನನ ಬಾಗಿಲು, ಮತ್ತೊಂದು ದಾನಿನ ಬಾಗಿಲು.33ದಕ್ಷಿಣದ ಕಡೆಯಲ್ಲಿ ಉದ್ದವು ನಾಲ್ಕು ಸಾವಿರದ ಐನೂರು ಮೊಳವು; ಅದರಲ್ಲಿ ಮೂರು ಬಾಗಿಲುಗಳು; ಒಂದು ಸಿಮೆಯೋನನ ಬಾಗಿಲು, ಇನ್ನೊಂದು ಇಸ್ಸಾಕಾರನ ಬಾಗಿಲು, ಮತ್ತೊಂದು ಜೆಬುಲೂನಿನ ಬಾಗಿಲು.34ಪಶ್ಚಿಮದ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳವು; ಅದರಲ್ಲಿ ಮೂರು ಬಾಗಿಲುಗಳು; ಒಂದು ಗಾದಿನ ಬಾಗಿಲು, ಇನ್ನೊಂದು ಆಶೇರಿನ ಬಾಗಿಲು, ಮತ್ತೊಂದು ನಫ್ತಾಲಿನ ಬಾಗಿಲು.35ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ <<ಯೆಹೋವನ ನೆಲೆ >> ಎಂದು ಹೆಸರಾಗುವುದು.
ದಾನಿಯೇಲನು
1ನೆಬೂಕದ್ನೆಚರನ ಆಸ್ಥಾನದಲ್ಲಿ ಇಬ್ರಿಯ ಯುವಕರು
1ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕಿದನು.2ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.3ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, <<ನೀನು ಇಸ್ರಾಯೇಲರಲ್ಲಿ ಅಂದರೆ ರಾಜವಂಶೀಯರಲ್ಲಿ4ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು>> ಎಂಬುದಾಗಿ ಅಪ್ಪಣೆಕೊಟ್ಟನು.5ಇದಲ್ಲದೆ, <<ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನ ಪದಾರ್ಥಗಳನ್ನೂ, ರಾಜನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು>> ಎಂದು ಆಜ್ಞಾಪಿಸಿದನು.6ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.7ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.8ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, <<ನಾನು ಅಶುದ್ಧನಾಗಲಾರೆ, ಕ್ಷಮಿಸು>> ಎಂದು ವಿಜ್ಞಾಪಿಸಿದನು.9ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು.10ಆ ವಿಜ್ಞಾಪನೆಯನ್ನು ಕೇಳಿ ಕಂಚುಕಿಯರ ಅಧ್ಯಕ್ಷನು ದಾನಿಯೇಲನಿಗೆ, <<ನಿಮಗೆ ಆಹಾರ ಮತ್ತು ಪಾನಗಳನ್ನು ಏರ್ಪಡಿಸಿದ್ದ ನನ್ನ ಒಡೆಯನಾದ ರಾಜನು ನಿಮ್ಮಂತೆ ಆರಿಸಲ್ಪಟ್ಟ ಯುವಕರ ಮುಖಕ್ಕಿಂತ ನಿಮ್ಮ ಮುಖವು ಬಾಡಿರುವುದನ್ನು ನೋಡಿ, ರಾಜನು ನನ್ನ ತಲೆಯನ್ನು ನೀವು ತೆಗೆಯಿಸಲು ಕಾರಣರಾಗುವಿರಿ>> ಎಂದು ಭಯ ವ್ಯಕ್ತಪಡಿಸಿದನು.11ದಾನಿಯೇಲನು ತನ್ನನ್ನೂ, ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವುದಕ್ಕೆ ಕಂಚುಕಿಯರ ಅಧ್ಯಕ್ಷನು12ನೇಮಿಸಿದ್ದ ವಿಚಾರಕನಿಗೆ, <<ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ ಮತ್ತು ಪಾನಕ್ಕೆ ನೀರು ನಮಗೆ ಒದಗಲಿ.13ಆ ಮೇಲೆ ನಮ್ಮ ಮುಖಗಳನ್ನೂ ರಾಜನ ಆಹಾರವನ್ನು ಉಣ್ಣುವ ಯುವಕರ ಮುಖಗಳನ್ನೂ, ಹೋಲಿಸಿನೋಡು; ನೋಡಿದ್ದಕ್ಕೆ ತಕ್ಕ ಹಾಗೆ ನಿನ್ನ ಸೇವಕರನ್ನು ನಡೆಸು>> ಎಂದು ಬಿನ್ನವಿಸಿದನು.14ಅವನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನ ಪರೀಕ್ಷಿಸಿದನು.15ಅವರು ಹತ್ತು ದಿನಗಳ ನಂತರ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ, ಪುಷ್ಟರಾಗಿಯೂ ಕಾಣಿಸಿದರು.16ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ, ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು.17ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.18ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದು ತಂದನು.19ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.20ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.21ದಾನಿಯೇಲನು ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿ ಸೇವಕನಾಗಿಯೇ ಇದ್ದನು.
2ನೆಬೂಕದ್ನೆಚ್ಚರನ ಕನಸು
1ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.2ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.3ರಾಜನು ಅವರಿಗೆ, <<ನಾನು ಕನಸುಕಂಡೆನು, ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಿಸುತ್ತದೆ>> ಎಂಬುದಾಗಿ ಹೇಳಿದನು.4 ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, <<ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು>> ಎಂದು ಅರಿಕೆಮಾಡಿದರು.5ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, <<ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು.6ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ>> ಎಂದು ಹೇಳಿದನು.7ಪಂಡಿತರು ಉತ್ತರವಾಗಿ, <<ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು>> ಎಂಬ ಉತ್ತರವನ್ನೇ ಪುನಃ ಕೊಟ್ಟರು.8ಅದಕ್ಕೆ ರಾಜನು, <<ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ ಮರಣದಂಡನೆಯ ನಿಯಮವೇ ನಿಮಗೆ ಗತಿಯಾಗುವುದು ಎಂಬ ನನ್ನ ಮಾತು ಖಂಡಿತವೆಂದು ನೀವು ತಿಳಿದುಕೊಂಡು ಕಾಲಹರಣ ಮಾಡುತ್ತಿದ್ದೀರಿ, ಇದು ನನಗೆ ಚೆನ್ನಾಗಿ ಗೊತ್ತು.9ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು>> ಎಂದು ಹೇಳಿದನು.10ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, <<ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.11ರಾಜನು ಕೇಳುವ ಸಂಗತಿಯು ಅತಿ ಕಷ್ಟವಾದದ್ದು. ನರಜನ್ಮದವರ ಮಧ್ಯೆ ವಾಸಿಸುವ ದೇವರುಗಳೇ ಹೊರತು ಇನ್ಯಾರೂ ರಾಜನ ಸಮ್ಮುಖದಲ್ಲಿ ಅದನ್ನು ತಿಳಿಸಲಾರರು>> ಎಂದು ಉತ್ತರಕೊಟ್ಟರು.12ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.13ಕೂಡಲೆ ಆ ಆಜ್ಞೆಯು ಪ್ರಕಟವಾಯಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ, ಅವನ ಸ್ನೇಹಿತರನ್ನೂ ಕೊಲ್ಲುವುದಕ್ಕೆ ಹುಡುಕಿದರು.14ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ, ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತನಾಡಿ,15<<ಈ ರಾಜಾಜ್ಞೆಯು ಏಕೆ ಇಷ್ಟು ಉಗ್ರವಾಗಿದೆ?>> ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.16ಆ ಮೇಲೆ ದಾನಿಯೇಲನು ಅರಮನೆಗೆ ಬಂದು, <<ನನಗೆ ಸಮಯವನ್ನು ಕೊಟ್ಟರೆ ನಾನು ಆ ಕನಸಿನ ಅರ್ಥವನ್ನು ರಾಜನಿಗೆ ವಿವರಿಸುವೆನು>> ಎಂದು ಅರಿಕೆ ಮಾಡಿದನು.17ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ,18<<ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ>> ಎಂದನು.19ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು,
20<<ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಸ್ತುತಿಸ್ತೋತ್ರ ಉಂಟಾಗಲಿ!ಜ್ಞಾನ ತ್ರಾಣಗಳು ಆತನವುಗಳೇ.
21ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ,ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ;
ಜ್ಞಾನಿಗಳ ಜ್ಞಾನವು,
ವಿವೇಕಿಗಳ ವಿವೇಕವು ಆತನ ವರವೇ.
22ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ;ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು;
ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.
23ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ,ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ;
ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ>> ಎಂದನು.
ದಾನಿಯೇಲನು ಕನಸಿನ ಅರ್ಥವನ್ನು ವಿವರಿಸಿದ್ದು
24ನಂತರ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ, <<ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು>> ಎಂದು ಹೇಳಿದನು.25ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಬಳಿಗೆ ಶೀಘ್ರವಾಗಿ ಕರೆದುಕೊಂಡು ಹೋಗಿ, <<ರಾಜನೇ, ಕನಸಿನ ಅಭಿಪ್ರಾಯವನ್ನು ನಿನಗೆ ತಿಳಿಸಬಲ್ಲವನೊಬ್ಬನು ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ನನಗೆ ಸಿಕ್ಕಿದ್ದಾನೆ>> ಎಂದು ಅರಿಕೆಮಾಡಿದನು.26ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, <<ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?>> ಎಂದು ಕೇಳಿದನು.27ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, <<ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು.28ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.29<<ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವುದೋ? ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದೆ ಸಂಭವಿಸುವುದನ್ನು ನಿನಗೆ ಗೋಚರಮಾಡಿದ್ದಾನೆ.30ನಾನೇ ಎಲ್ಲಾ ಮನುಷ್ಯರಿಗಿಂತ ಹೆಚ್ಚು ಬುದ್ಧಿವಂತನಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದು ಬರಲಿ ಎಂದು ಈ ರಹಸ್ಯವು ನನಗೂ ಪ್ರಕಟವಾಗಿದೆ.31<<ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು.32ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ,33ಕಾಲುಗಳು ಕಬ್ಬಿಣ, ಪಾದಗಳು ಕಬ್ಬಿಣ ಮತ್ತು ಮಣ್ಣು.34<<ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.35ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.36<<ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ.37ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.38ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ.39<<ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು.40<<ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು.41<<ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು.42ಕಾಲ್ಬೆರಳುಗಳ ಒಂದಂಶವು ಕಬ್ಬಿಣ, ಒಂದಂಶವು ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶವು ಗಟ್ಟಿ, ಒಂದಂಶವು ಜೊಂಡಾಗಿರುವುದು.43ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀನು ನೋಡಿದ ಮೇರೆಗೆ, ಆ ರಾಜ್ಯಾಗಳ ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು. ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕೂಡಿಕೊಳ್ಳುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಹೊಂದಿಕೊಳ್ಳುವುದಿಲ್ಲ.44<<ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.45ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು>> ಎಂದು ಹೇಳಿದನು.ದಾನಿಯೇಲನನ್ನು ಸನ್ಮಾನಿಸಿದ್ದು
46ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, <<ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ ಧೂಪ ಹಾಕಬೇಕು>> ಎಂದು ಆಜ್ಞಾಪಿಸಿದನು.47ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, <<ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ>> ಎಂದು ಹೇಳಿದನು.48ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.49ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು.
3ಬಂಗಾರದ ಪತ್ರಿಮೆಯನ್ನು ಆರಾಧಿಸಲು ಆಜ್ಞೆ
1ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.2ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು.3ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು.4ಆಗ ಸಾರುವವನು ಗಟ್ಟಿಯಾಗಿ ಕೂಗಿ, <<ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.5ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.6ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು>> ಎಂದು ಸಾರಿದನು.7ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.8ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು9ರಾಜನಾದ ನೆಬೂಕದ್ನೆಚ್ಚರನಿಗೆ, <<ಅರಸನೇ, ಚಿರಂಜೀವಿಯಾಗಿರು!10ಪ್ರಭುವೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು, ಬಂಗಾರದ ಪ್ರತಿಮೆಯನ್ನು ಪೂಜಿಸಲಿ.11<<ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.12ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ>> ಎಂದು ಅರಿಕೆಮಾಡಿದರು.13ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.14ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, <<ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ?15<<ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?>> ಎಂದು ಹೇಳಿದನು.16ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, <<ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.17<ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.18ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ> >> ಎಂದು ಉತ್ತರಕೊಟ್ಟರು.ದೇವಭಕ್ತರನ್ನು ಅಗ್ನಿಯು ಸುಡದೆ ಇದ್ದದ್ದು
19ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.20ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.21ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು.22ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.23ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು.24ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, <<ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?>> ಎಂದು ಕೇಳಲು ಅವರು ರಾಜನಿಗೆ, <<ಅರಸನೇ, ಹೌದು, ಹಾಕಿರುವುದು ಸತ್ಯ>> ಎಂದು ಉತ್ತರಕೊಟ್ಟರು.25ಅದಕ್ಕೆ ಅವನು, <<ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ>> ಎಂದು ಹೇಳಿದನು.26ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, <<ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.27ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ>> ಎಂದು ತಿಳಿದುಕೊಂಡರು.28ಆಗ ನೆಬೂಕದ್ನೆಚ್ಚರನು, <<ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.29ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ>> ಎಂದು ಹೇಳಿದನು.30ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತ ಪದವಿ ನೀಡಿ ಗೌರವಿಸಿದನು.
4ಕಡಿದ ಮರದ ಕನಸು
1ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, <<ನಿಮಗೆ ಸುಖವು ಹೆಚ್ಚೆಚ್ಚಾಗಲಿ!2ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.
3ಆತನ ಮಹತ್ತುಗಳು ಎಷ್ಟೋ ಅತಿಶಯ!ಆತನ ಅದ್ಭುತಗಳು ಎಷ್ಟೋ ವಿಶೇಷ!
ಆತನ ರಾಜ್ಯವು ಶಾಶ್ವತರಾಜ್ಯ,
ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.>>
4<<ನೆಬೂಕದ್ನೆಚ್ಚರನಾದ ನಾನು ನನ್ನ ಆಲಯದಲ್ಲಿ ಹಾಯಾಗಿದ್ದೆನು, ಹೌದು ನನ್ನ ಅರಮನೆಯಲ್ಲಿ ಸುಖವಾಗಿದ್ದೆನು.5ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.6ಆದುದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರೆದುತರುವ ಹಾಗೆ ಆಜ್ಞಾಪಿಸಿದೆನು.7<<ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.8ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು,9<ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.10ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ. ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು.11ಆ ವೃಕ್ಷವು ಬೆಳೆದು ಬಲಗೊಂಡಿತ್ತು, ಅದರ ತುದಿಯು ಆಕಾಶವನ್ನು ಮುಟ್ಟಿತ್ತು, ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.12ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಆದ್ದರಿಂದ ಎಲ್ಲಕ್ಕೂ ಆಹಾರ, ನೆರಳೂ, ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶ ಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.13ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ,14ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!15ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ; ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಭೂಮಿಯ ಹುಲ್ಲು ಮೃಗಗಳಿಗೆ ಗತಿಯಾದಂತೆ ಅದಕ್ಕೆ ಗತಿಯಾಗಲಿ.16ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ.17ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು> ಎಂದು ಸಾರಿದನು.18ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.>>ದಾನಿಯೇಲನು ಕನಸಿನ ಅರ್ಥವನ್ನು ವಿವರಿಸಿದ್ದು
19ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, <<ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ>> ಎಂದು ಹೇಳಲು ಬೇಲ್ತೆಶಚ್ಚರನು, <<ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!20<<ಯಾವ ವೃಕ್ಷವು ಬೆಳೆದು ಬಲಗೊಂಡು ಆಕಾಶದ ತುದಿಯನ್ನು ಮುಟ್ಟುತ್ತಾ,21ಲೋಕದವರೆಲ್ಲರಿಗೂ ಕಾಣಿಸುತ್ತಾ, ಅಂದವಾದ ಎಲೆಗಳನ್ನೂ ಬಹಳ ಹಣ್ಣುಗಳನ್ನೂ ಬಿಡುತ್ತಾ, ಎಲ್ಲಕ್ಕೂ ಆಹಾರವನ್ನು ಒದಗಿಸುತ್ತಾ ತನ್ನ ನೆರಳನ್ನು ಭೂಜಂತುಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡುತ್ತಾ ಕನಸಿನಲ್ಲಿ ನಿನಗೆ ತೋರಿತೋ,22ಆ ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.23<<ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, <ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ> ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.24<<ರಾಜನೇ ಇದರ ತಾತ್ಪರ್ಯವೇನೆಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನಾದ ದೇವರ ತೀರ್ಪು ಹೀಗಿದೆ.25ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.26ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನೆಂದರೆ ಪರಲೋಕಕ್ಕೆ ಸರ್ವಾಧಿಕಾರ ಉಂಟೆಂಬುವುದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವುದು ಎಂಬುವುದೇ.27ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು>> ಎಂದು ಅರಿಕೆ ಮಾಡಿದನು.ಕನಸಿನ ನೆರವೇರುವಿಕೆ
28ಇದೆಲ್ಲಾ ರಾಜನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು.29ಹನ್ನೆರಡು ತಿಂಗಳು ಕಳೆದನಂತರ ಅವನು ಬಾಬೆಲಿನ ಅರಮನೆಯ ಮಹಡಿಯ ಮೇಲೆ ತಿರುಗಾಡುತ್ತಾ,30<<ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್>> ಎಂದು ಕೊಚ್ಚಿಕೊಂಡನು.31ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ, <<ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು;32ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು>> ಎಂದು ಆಕಾಶವಾಣಿಯಾಯಿತು.33ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.ನೆಬೂಕದ್ನೆಚ್ಚರನು ದೇವರನ್ನು ಸ್ತುತಿಸಿದ್ದು
34ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು.<<ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ,
ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು;
ಆತನ ಆಳ್ವಿಕೆಯು ಶಾಶ್ವತ,
ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.
35ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿಪರಲೋಕ ಸೈನ್ಯದವರಲ್ಲಿಯೂ,
ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ;
ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ <ನೀನು ಏನು ಮಾಡುತ್ತೀ?> >> ಎಂದು ಯಾರೂ ಕೇಳಲಾರರು.
36ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು. 5ಗೋಡೆಯ ಮೇಲೆ ಅದ್ಭುತ ಲೇಖನ
1ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.2ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.3ಯೆರೂಸಲೇಮಿನ ದೇವಾಲಯದಿಂದ ಸೂರೆಯಾದ ಬಂಗಾರದ ಪಾತ್ರೆಗಳನ್ನು ತಂದೊಡನೆ ರಾಜನೂ, ಅವನ ಮುಖಂಡರೂ, ಪತ್ನಿಯರು ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.4ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.5ಅದೇ ಸಮಯದಲ್ಲಿ ಒಬ್ಬನ ಕೈಯ ಬೆರಳುಗಳು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು.6ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.7ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, <<ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು>> ಎಂದು ಹೇಳಿದನು.8ಆಸ್ಥಾನದ ವಿದ್ವಾಂಸರೆಲ್ಲರು ಬಂದು ನೋಡಿದರು; ಆದರೆ ಆ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ.9ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ವಿಸ್ಮಯಗೊಂಡರು.10ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು, <<ರಾಜನೇ, ಚಿರಂಜೀವಿಯಾಗಿರು. ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!11<<ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.12ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು>> ಎಂದಳು.ದಾನಿಯೇಲನು ಲೇಖನದ ಅರ್ಥವನ್ನು ವಿವರಿಸಿದ್ದು
13ಆಗ ದಾನಿಯೇಲನನ್ನು ರಾಜನ ಬಳಿ ಬರಮಾಡಲು ರಾಜನು ಅವನಿಗೆ, <<ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲ್ ಎಂಬುವನು ನೀನೋ?14ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.15<<ಈಗ ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು.16ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು>> ಎಂದು ಹೇಳಿದನು.17ಆಗ ದಾನಿಯೇಲನು ರಾಜನ ಬಳಿ, <<ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ. ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು.18ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.19ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.20<<ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು.21ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.22<<ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ.23ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.24ಹೀಗಿರಲು ಆ ಹಸ್ತವು ದೇವರ ಸನ್ನಿಧಿಯಿಂದ ಬಂದು ಈ ಬರಹವನ್ನು ಬರೆಯಿತು.25<<ಬರೆದ ಬರಹವು ಇದೇ, <ಮೆನೇ, ಮೆನೇ, ತೆಕೇಲ್, ಉಫರ್ಸಿನ್.>26ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ.27ತೆಕೇಲ್ ಎಂದರೆ, ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ನಿನ್ನ ಯೋಗ್ಯತೆ ಕಡಿಮೆಯಾಗಿ ಕಂಡು ಬಂದಿದೆ.28ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ>> ಎಂದು ಅರಿಕೆಮಾಡಿದನು.29ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.30ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.31ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು.
6ದಾನಿಯೇಲನು ಸಿಂಹಗಳ ಗವಿಯಲ್ಲೂ ರಕ್ಷಿತನಾದದ್ದು
1ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು.2ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು.3ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.4ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.5ಆಗ ಆ ಮನುಷ್ಯರು, <<ಈ ದಾನಿಯೇಲನ ಮೇಲೆ ತಪ್ಪುಹೊರಿಸಲು ಇವನ ದೇವಧರ್ಮದ ಮೂಲಕವೇ ಹೊರತು ಇನ್ಯಾವುದರಲ್ಲಿಯೂ ನಮಗೆ ಅವಕಾಶ ದೊರೆಯದು>> ಎಂದುಕೊಂಡರು.6ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, <<ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!7ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.8ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು>> ಎಂದು ಬಿನ್ನವಿಸಿದರು.9ಆದುದರಿಂದ ರಾಜನಾದ ದಾರ್ಯಾವೆಷನು ಆ ನಿಬಂಧನಶಾಸನಕ್ಕೆ ರುಜು ಹಾಕಿದನು.10ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು11ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುತ್ತಿರುವುದನ್ನು ಕಂಡರು.12ಅವರು ರಾಜನ ಬಳಿಗೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, <<ರಾಜನೇ, ಯಾರಾದರೂ ಮೂವತ್ತು ದಿನಗಳ ತನಕ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆವಿಜ್ಞಾಪನೆ ಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದ್ದೀಯಲ್ಲಾ>> ಎಂದು ಕೇಳಲು, ರಾಜನು, <<ಹೌದು, ಮೇದ್ಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರವಾದ ನಿಬಂಧನೆ>> ಎಂದು ಉತ್ತರಕೊಟ್ಟನು.13ಆಗ ಅವರು ರಾಜನ ಸನ್ನಿಧಿಯಲ್ಲಿ, <<ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ>> ಎಂದು ಅರಿಕೆ ಮಾಡಿದರು.14ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು.15ಇದನ್ನು ತಿಳಿದು ಆ ಜನರು ರಾಜನ ಬಳಿಗೆ ಕೂಡಿಬಂದು, <<ಪ್ರಭುವೇ, ರಾಜನು ವಿಧಿಸಿದ ಯಾವ ನಿಬಂಧನೆಯಾಗಲಿ, ನಿಯಮವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರವು ಮೇದ್ಯಯರಲ್ಲಿಯೂ, ಪಾರಸಿಯರಲ್ಲಿಯೂ ಉಂಟೆಂಬುದು ನಿನಗೆ ಗೊತ್ತಿರಲಿ>> ಎಂದು ಹೇಳಿದರು. ಇದರಿಂದ ಅನಿವಾರ್ಯವಾಗಿ ರಾಜನು ಅಪ್ಪಣೆ ಕೊಡಲೇ ಬೇಕಾಯಿತು.16ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, <<ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ>> ಎಂದು ಹರಸಿದನು.17ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಶಿಕ್ಷೆಯನ್ನು ಯಾರು ಬದಲಾಯಿಸದಂತೆ ರಾಜನ ಮುದ್ರೆಯಿಂದಲೂ, ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮುದ್ರೆಯನ್ನು ಹಾಕಿ ಭದ್ರ ಮಾಡಲಾಯಿತು.18ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ.19ಮರುದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು.20ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, <<ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?>> ಎಂದು ಕೇಳಿದನು.21ಅದಕ್ಕೆ ದಾನಿಯೇಲನು ರಾಜನಿಗೆ, <<ಅರಸನೇ, ಚಿರಂಜೀವಿಯಾಗಿರು!22ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ>> ಎಂದು ಹೇಳಿದನು.23ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.24ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.25ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು.ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!
26<<ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ;ಆತನೇ ಜೀವಸ್ವರೂಪನಾದ ಸನಾತನ ದೇವರು,
ಆತನ ರಾಜ್ಯವು ಎಂದಿಗೂ ಅಳಿಯದು,
ಆತನ ಆಳ್ವಿಕೆಯು ಶಾಶ್ವತವಾಗಿರುವುದು;
27ಆತನು ಉದ್ಧರಿಸುವವನೂ, ರಕ್ಷಿಸುವವನೂ,ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ;
ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.>>
28ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸನ್ಮಾನ, ಗೌರವಗಳಿಂದ ಬಾಳಿದನು. 7ದಾನಿಯೇಲನ ನಾಲ್ಕು ಮೃಗಗಳ ಬಗ್ಗೆ ಕನಸು
1ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು.2ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, <<ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.3ಒಂದಕ್ಕಿಂತ ಒಂದು ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಸಾಗರದೊಳಗಿಂದ ಬಂದವು.4ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲ್ಪಟ್ಟಿತು.5ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.6ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡಲ್ಪಟ್ಟಿತು.7ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.8ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.9<<ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.10ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.11ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿ ಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು, ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.12ಉಳಿದ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವವನ್ನು ಉಳಿಸಿದರು.13ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.14ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.ಕನಸಿನಲ್ಲಿ ಆದ ದರ್ಶನದ ಅರ್ಥ
15<<ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.16ನಾನು ಹತ್ತಿರ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸತ್ಯಾರ್ಥವೇನೆಂದು ವಿಚಾರಿಸಲು ಅವನು ನನಗೆ,17<ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಏರತಕ್ಕ ನಾಲ್ಕು ರಾಜ್ಯಗಳು.18ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು> ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.19ಆ ಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರುಳ್ಳ ಮೃಗವು ಕೆಲವನ್ನು ನುಂಗಿ ಕೆಲವನ್ನು ಚೂರುಚೂರು ಮಾಡಿ ಉಳಿದದ್ದನ್ನು ಕಾಲುಗಳಿಂದ ತುಳಿದು, ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಅತಿ ಭಯಂಕರವಾಗಿತ್ತು.20ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ21ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ,22ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.>>23ಆಗ ಅವನು ನನಗೆ, <<ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ಉಳಿದ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವುದು.24ಆ ಹತ್ತು ಕೊಂಬುಗಳ ವಿಷಯವೇನೆಂದರೆ ಆ ರಾಜ್ಯದಲ್ಲಿ ಹತ್ತು ಮಂದಿ ಅರಸರು ಉಂಟಾಗುವರು, ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮೊದಲಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಸದೆಬಡೆಯುವನು.25ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.26ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು.27ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು>> ಎಂದು ಹೇಳಿದನು.28ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.
8ಟಗರಿನ ಮತ್ತು ಹೋತದ ವಿಷಯವಾದ ಕನಸು
1ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು.2ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.3ನಾನು ಕಣ್ಣೆತ್ತಿ ನೋಡಲು ಇಗೋ, ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದಾಗಿತ್ತು. ಆ ದೊಡ್ಡದು ಮೊಳೆತದ್ದು ಚಿಕ್ಕ ಕೊಂಬು ಮೊಳೆತ ಮೇಲೆ.4ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.5ನಾನು ಗಮನಿಸುತ್ತಿರುವಾಗ ಇಗೋ, ಒಂದು ಹೋತವು ಪಶ್ಚಿಮದಿಂದ ಭೂಮಂಡಲವನ್ನೆಲ್ಲಾ ದಾಟಿಕೊಂಡು ನೆಲವನ್ನು ಮುಟ್ಟದೆ ಓಡಿ ಬಂತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.6ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತವು ಬಂದು, ಪರಾಕ್ರಮದಿಂದ ಉಬ್ಬಿ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು.7ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ, ಅದರ ಮೇಲಣ ಕ್ರೋಧದಿಂದ ಉರಿಯುತ್ತಾ, ಅದರ ಮೇಲೆ ಹಾಯ್ದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದಕ್ಕೆ ಎದುರು ಬೀಳಲು ಟಗರಿಗೆ ಶಕ್ತಿಯಿರಲಿಲ್ಲ. ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದು ಹಾಕಿತು. ಟಗರನ್ನು ಹೋತದಿಂದ ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.8ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು.9ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.10ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ, ಆ ಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.11ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.12ಆತನ ಪವಿತ್ರ ಸ್ಥಾನವನ್ನು ಕೆಡವಿ ನಿತ್ಯ ಹೋಮವನ್ನು ಅಡಗಿಸುವುದಕ್ಕೆ ನೀಚತನದಿಂದ ಒಂದು ಸೈನ್ಯವನ್ನಿಳಿಸಿ ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿ, ತನ್ನ ಇಷ್ಟಾರ್ಥವನ್ನು ನೆರವೇರಿಸಿಕೊಂಡು ವೃದ್ಧಿಗೆ ಬಂತು.13ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, <<ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?>> ಎಂದು ಪ್ರಶ್ನೆಮಾಡಿದನು.14ಅವನು ಇವನಿಗೆ, <<ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರ ರವರೆಗೆ ನಡೆಯುವವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆಯಾಗುವುದು>> ಎಂದು ಹೇಳಿದನು.ಗಬ್ರಿಯೇಲನು ಕನಸಿನ ಅರ್ಥವನ್ನು ವಿವರಿಸಿದ್ದು
15ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ಇಗೋ, ಮನುಷ್ಯ ಸದೃಶನೊಬ್ಬನು ನನ್ನೆದುರಿಗೆ ನಿಂತಿದ್ದನು.16ಆಗ, <<ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು>> ಎಂದು ಮನುಷ್ಯ ಧ್ವನಿಯಂತಹ ಒಂದು ವಾಣಿಯು ಊಲಾ ಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು.17ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, <<ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು>> ಎಂದು ಹೇಳಿದನು.18ಅವನು ನನ್ನೊಡನೆ ಮಾತನಾಡುತ್ತಿರುವಲ್ಲಿ ನಾನು ಮೈಮರೆತು ಬೋರಲು ಬಿದ್ದಿದ್ದೆನು. ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ,19<<ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.20ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯ ಮತ್ತು ಪಾರಸಿಯ ರಾಜರು.21ಆ ಹೋತವು ಗ್ರೀಕ್ ರಾಜ್ಯ, ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.22ಆ ಕೊಂಬು ಮುರಿದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದ ವಿಷಯವೇನೆಂದರೆ ಆ ಜನಾಂಗದೊಳಗಿಂದ ನಾಲ್ಕು ರಾಜ್ಯಗಳು ಏಳುವವು; ಆದರೆ ಮೊದಲನೆಯ ರಾಜನಿಗೆ ಇದ್ದಷ್ಟು ಶಕ್ತಿಯು ಅವುಗಳಿಗೆ ಇರುವುದಿಲ್ಲ.23ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು.24ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು, ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ, ದೇವಜನರನ್ನೂ ಧ್ವಂಸಮಾಡುವನು.25ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.26ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು>> ಎಂದು ಹೇಳಿದನು.27ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.
9ದಾನಿಯೇಲನ ಪ್ರಾರ್ಥನೆಗೆ, ದೇವರಿಂದ ಬಂದ ಉತ್ತರ
1ಅಹಷ್ವೇರೋಷನ ಮಗನೂ, ಮೇದ್ಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,2ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.3ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.4ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, <<ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,5ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು6ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.7ಕರ್ತನೇ, ನೀನು ಧರ್ಮಸ್ವರೂಪನು, ನಾವೋ ನಾಚಿಕೆಗೆ ಈಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇಮಿನ ನಿವಾಸಿಗಳೂ ನಿನ್ನ ವಿರುದ್ಧವಾಗಿ ಮಾಡಿದ ದ್ರೋಹದ ನಿಮಿತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ, ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲರೂ ನಾಚಿಕೆಗೆ ಈಡಾಗಿದ್ದಾರೆ.8ಸ್ವಾಮೀ, ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದರಿಂದ ನಾವೂ ನಮ್ಮ ಅರಸರೂ, ಪ್ರಧಾನರೂ, ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.9ಕರ್ತನಾದ ನಮ್ಮ ದೇವರು ಕರುಣಿಸುವವನೂ, ಕ್ಷಮಿಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ.10ಕರ್ತನಾದ ನಮ್ಮ ದೇವರ ಮಾತನ್ನು ಕೇಳಲಿಲ್ಲ, ತನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಗೊತ್ತು ಮಾಡಿದ ಧರ್ಮಮಾರ್ಗದಲ್ಲಿ ನಡೆಯಲಿಲ್ಲ.11ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.12ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.13ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.14ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.15ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.16ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ಮತ್ತು ನಿನ್ನ ಪವಿತ್ರ ಪರ್ವತವೂ ಆದ ಯೆರೂಸಲೇಮಿನ ಮೇಲೆ ನಿನಗಿರುವ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪೂರ್ವಿಕರ ಪಾಪಾಪರಾಧಗಳ ನಿಮಿತ್ತ ಯೆರೂಸಲೇಮೂ, ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.17ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆಯ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿಮಿತ್ತವೇ ಪ್ರಸನ್ನಮುಖದಿಂದ ನೋಡು.18ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೇನೂ ಅಲ್ಲ. ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ.19ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!>>ಎಪ್ಪತ್ತು ವಾರಗಳ ಕುರಿತಾದ ಪ್ರವಾದನೆ
20ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.21ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.22ಆತನು ನನ್ನೊಂದಿಗೆ ಹೀಗೆ ಮಾತನಾಡಿ ಉಪದೇಶಿಸಿದನು, <<ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವುದಕ್ಕೆ ಈಗ ಬಂದೆನು.23ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಪ್ರಿಯನು. ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.24ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.25ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.26ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.27ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.>>
10ದೇವದೂತನ ದರ್ಶನ
1ಪಾರಸಿಯ ರಾಜನಾದ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು.2ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು.3ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.4ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲೆಂಬ5ಟೈಗ್ರಿಸ್ ಮಹಾನದಿಯ ದಡದ ಮೇಲೆ ಇದ್ದು ಕಣ್ಣೆತ್ತಿ ನೋಡಲು ಇಗೋ, ನಾರಿನ ಬಟ್ಟೆಯನ್ನು ಹೊದ್ದುಕೊಂಡು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡ ಒಬ್ಬ ಪುರುಷನು ನನಗೆ ಕಾಣಿಸಿದನು;6ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ಮಿಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಜನಸಂದಣಿಯ ಕೋಲಾಹಲದಂತೆ ಕೇಳಿಸಿತು.7ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು.8ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ರಾಣನಾದೆನು.9ಆದರೂ ಅವನು ಮಾತನಾಡುವ ಶಬ್ದವನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಬೋರಲು ಬಿದ್ದಿದ್ದೆನು.10ಆಹಾ, ನನಗೆ ಹಸ್ತಸ್ಪರ್ಶವಾಯಿತು; ನಾನು ಗಡಗಡನೆ ನಡುಗುತ್ತಾ ಮೊಣಕಾಲೂರಿ ಅಂಗೈಗಳ ಮೇಲೆ ನಿಲ್ಲುವಂತೆ ಮಾಡಿತು.11ಆಗ ಅವರು ನನಗೆ, <<ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ>> ಎಂದು ಹೇಳಿದನು. ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.12ಆ ಮೇಲೆ ಅವನು ನನಗೆ, <<ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು.13ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ,14ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು>> ಎಂದು ಹೇಳಿದನು.15ಅವನು ಈ ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು.16ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, <<ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ.17ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತನಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲ>> ಎಂದು ಹೇಳಿದೆನು.18ಮನುಷ್ಯ ಸದೃಶನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು.19ಆ ಮೇಲೆ ಆ ಪುರುಷನು ನನಗೆ, <<ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು>> ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, <<ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ>>20ಎಂದು ಅರಿಕೆಮಾಡಲು ಅವನು ನನಗೆ ಹೀಗೆ ಹೇಳಿದನು, <<ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯ ಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್ ರಾಜ್ಯದ ದಿವ್ಯಪಾಲಕನು ಎದುರು ಬೀಳುವನು.21ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.>>
111ಮೇದ್ಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆನು.ದಕ್ಷಿಣ ಮತ್ತು ಉತ್ತರ ದಿಕ್ಕಿನ ಅರಸರು
2ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, <<ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.3ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾ ಪ್ರಭುತ್ವದಿಂದ ಆಳುತ್ತಾ, ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.4ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ ನಾಲ್ಕು ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು. ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವುದು.5ದಕ್ಷಿಣ ರಾಜ್ಯದ ರಾಜನೂ, ಅವನ ಸರದಾರರಲ್ಲಿ ಒಬ್ಬನೂ ಬಲಗೊಳ್ಳುವರು. ಸರದಾರನು ರಾಜನಿಗಿಂತ ಹೆಚ್ಚು ಬಲಗೊಂಡು ಪ್ರಭುತ್ವಕ್ಕೆ ಬರುವನು. ಅವನ ರಾಜ್ಯವು ದೊಡ್ಡ ರಾಜ್ಯವಾಗಿರುವುದು.6ಕೆಲವು ವರ್ಷಗಳಾದ ಮೇಲೆ ಅವರು ಸೇರಿಕೊಳ್ಳುವರು. ದಕ್ಷಿಣ ದಿಕ್ಕಿನ ರಾಜನ ಕುಮಾರಿಯು ಉತ್ತರ ರಾಜ್ಯದ ರಾಜನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಕ್ಕೆ ಬರುವಳು. ಆದರೂ ತನ್ನ ಭುಜಬಲವನ್ನು ಉಳಿಸಿಕೊಳ್ಳಲು ಆಗದು; ಅವನೂ, ಅವನ ತೋಳೂ ನಿಲ್ಲವು; ಅವಳೂ, ಅವಳನ್ನು ಕರೆದು ತಂದವರೂ, ಪಡೆದವನೂ, ತಕ್ಕೊಂಡವನೂ ಆ ಕಾಲದಲ್ಲಿ ನಾಶನಕ್ಕೆ ಈಡಾಗುವರು.7ಅನಂತರ ಅವಳು ಹುಟ್ಟಿದ ವಂಶವೃಕ್ಷದಲ್ಲಿ ಹುಟ್ಟಿದವರು ಅದರ ಸ್ಥಾನದಲ್ಲಿ ನಿಂತು ಉತ್ತರ ದಿಕ್ಕಿನ ರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು ಅವನ ದುರ್ಗದೊಳಗೆ ನುಗ್ಗಿ, ಅವರೊಡನೆ ಯುದ್ಧಮಾಡಿ, ಅವರನ್ನು ಗೆಲ್ಲುವರು.8ಅವರ ದೇವರುಗಳನ್ನೂ, ಎರಕದ ಬೊಂಬೆಗಳನ್ನೂ, ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ, ಸೂರೆ ಮಾಡಿಕೊಂಡು ಐಗುಪ್ತಕ್ಕೆ ಬಂದು, ಕೆಲವು ವರ್ಷಗಳ ತನಕ ಉತ್ತರ ದಿಕ್ಕಿನ ರಾಜನ ತಂಟೆಗೆ ಹೋಗುವುದಿಲ್ಲ.9ಬಳಿಕ ಉತ್ತರ ದಿಕ್ಕಿನ ರಾಜನು ದಕ್ಷಿಣ ದಿಕ್ಕಿನ ರಾಜನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗುವನು.10ಆ ಮೇಲೆ ಅವನ ಮಕ್ಕಳು ಯುದ್ಧ ಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ಮುಂದುವರೆದು ತುಂಬಿತುಳುಕಿ ಹಬ್ಬಿಕೊಳ್ಳುವುದು. ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣ ದಿಕ್ಕಿನ ರಾಜನ ದುರ್ಗದವರೆಗೆ ನುಗ್ಗುವರು.11ಆಗ ದಕ್ಷಿಣ ದಿಕ್ಕಿನ ರಾಜನು ಕ್ರೋಧದಿಂದ ಉರಿಯುತ್ತಾ ಹೊರಟು ಬಂದು, ಉತ್ತರ ದಿಕ್ಕಿನ ರಾಜನ ಸಂಗಡ ಯುದ್ಧ ಮಾಡುವನು. ಉತ್ತರ ದಿಕ್ಕಿನ ರಾಜನು ಮಹಾವ್ಯೂಹವನ್ನು ಕಟ್ಟಿದರೂ, ಅದೆಲ್ಲಾ ದಕ್ಷಿಣ ದಿಕ್ಕಿನ ರಾಜನ ಕೈಗೆ ಸಿಕ್ಕಿ ಒಯ್ಯಲ್ಪಡುವುದು.12ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.13ತರುವಾಯ ಉತ್ತರ ದಿಕ್ಕಿನ ರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿ ಬಹಳ ವರ್ಷಗಳ ನಂತರ ಮಹಾ ಸೈನ್ಯದಿಂದಲೂ, ಅಧಿಕ ಆಯುಧಗಳ ಸಮೇತವಾಗಿಯೂ ಬರುವನು.14ಆ ಕಾಲದಲ್ಲಿ ಅನೇಕರು ದಕ್ಷಿಣ ದಿಕ್ಕಿನ ರಾಜನಿಗೆ ಎದುರು ನಿಲ್ಲುವರು. ಇದಲ್ಲದೆ ನಿನ್ನ ಜನರಲ್ಲಿ ಹಿಂಸಕರು ಕನಸನ್ನು ನಿಜ ಮಾಡಬೇಕೆಂದು ದಂಗೆ ಏಳುವರು. ಆದರೆ ಬಿದ್ದುಹೋಗುವರು.15ಉತ್ತರ ದಿಕ್ಕಿನ ರಾಜನು ಬಂದು ದಿಬ್ಬ ಹಾಕಿ, ಕೋಟೆ ಕೊತ್ತಲದ ಪಟ್ಟಣವನ್ನು ಹಿಡಿಯುವನು; ದಕ್ಷಿಣದ ಭುಜಬಲವು ನಿಲ್ಲದು, ಅಲ್ಲಿನ ಮಹಾವೀರರು ತಡೆಯಲಾರರು, ಎದುರಿಸುವ ಯಾವ ಶಕ್ತಿಯೂ ಇರದು.16ದಕ್ಷಿಣ ದಿಕ್ಕಿನ ರಾಜನಿಗೆ ವಿರುದ್ಧವಾಗಿ ಬರುವವನು ತನ್ನ ಇಚ್ಛಾನುಸಾರ ನಡೆಯುವನು. ಅವನನ್ನು ಎದುರಿಸುವವರು ಯಾರು ಇಲ್ಲ, ನಾಶವನ್ನು ಕೈಯಲ್ಲಿಟ್ಟುಕೊಂಡು ಅಂದ ಚಂದದ ದೇಶದಲ್ಲಿ ನಿಂತಿರುವನು.17ದಕ್ಷಿಣ ದಿಕ್ಕಿನ ರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣು ಮಗಳನ್ನು ಕೊಡುವನು. ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲವಾಗುವುದಿಲ್ಲ.18ಆ ಮೇಲೆ ಅವನು ಕರಾವಳಿಯ ಕಡೆಗೆ ಕಣ್ಣಿಟ್ಟು ಅಲ್ಲಿ ಬಹಳ ದೇಶಗಳನ್ನು ಆಕ್ರಮಿಸುವನು. ಆದರೆ ಅವನು ಮಾಡುವ ನಿಂದೆಯನ್ನು ಒಬ್ಬ ಸರದಾರನು ನಿಲ್ಲಿಸಿ ಬಿಡುವುದಲ್ಲದೆ, ಅದು ಅವನ ಮೇಲೆಯೇ ತಿರುಗುವಂತೆ ಮಾಡುವನು.19ಆ ಮೇಲೆ ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗಿ ಎಡವಿ ಬಿದ್ದು ಇಲ್ಲವಾಗುವನು.20ಅವನ ಸ್ಥಾನದಲ್ಲಿ ಮತ್ತೊಬ್ಬನು ಎದ್ದು, ರಾಜ್ಯದಲ್ಲಿ ಶಿರೋಮಣಿಯಾದ ದೇಶವನ್ನೆಲ್ಲ ದೋಚಿಕೊಳ್ಳತಕ್ಕವನನ್ನು ನೇಮಿಸುವನು. ಅವನು ಕೆಲವು ದಿನಗಳೊಳಗೆ ನಾಶವಾಗುವನು. ಅವನ ನಾಶ ಕೋಪದ ಪೆಟ್ಟಿನಿಂದಲ್ಲ, ಯುದ್ಧದಿಂದಲೂ ಅಲ್ಲ.21<<ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು, ನೆಮ್ಮದಿಯ ಕಾಲದಲ್ಲಿ ಬಂದು ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.22ತುಂಬಿ ತುಳುಕುವ ವ್ಯೂಹಗಳೂ, ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.23ಅವನ ಸಂಗಡ ಒಪ್ಪಂದ ಮಾಡಿಕೊಂಡವನಿಗೆ ಕೂಡಲೆ ಮೋಸ ಮಾಡುವನು; ಸ್ವಲ್ಪ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.24ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ನುಗ್ಗುವನು. ತಂದೆ, ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು, ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.25ಅವನು ದೊಡ್ಡ ದಂಡೆತ್ತಿ ದಕ್ಷಿಣ ದಿಕ್ಕಿನ ರಾಜನ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯದಿಂದ ಹೊರಡುವನು. ದಕ್ಷಿಣ ದಿಕ್ಕಿನ ರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ನಿಲ್ಲಲಾರನು, ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವನು.26ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರ ದಿಕ್ಕಿನ ರಾಜನ ಸೈನ್ಯವು ತುಂಬಿ ತುಳುಕುವುದು. ಬಹಳ ಜನರು ಹತರಾಗಿ ಬೀಳುವರು.27ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು.28ಅನಂತರ ಉತ್ತರ ದಿಕ್ಕಿನ ರಾಜನು ಬಹಳ ಆಸ್ತಿಯನ್ನು ಐಶ್ವರ್ಯವನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು. ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವುದು. ಅವನು ತನಗೆ ಇಷ್ಟ ಬಂದಂತೆ ಮಾಡಿ ಮತ್ತೆ ಸ್ವದೇಶವನ್ನು ಸೇರುವನು.29ನಿಶ್ಚಿತ ಕಾಲದಲ್ಲಿ ಪುನಃ ದಕ್ಷಿಣ ದಿಕ್ಕಿನ ದೇಶದ ಮೇಲೆ ನುಗ್ಗುವನು. ಆದರೆ ಮೊದಲು ಆದಂತೆಯೇ ಎರಡನೆಯ ಸಲ ಆಗದು.30ಅವನ ವಿರುದ್ಧವಾಗಿ ಕಿತ್ತೀಮಿನ ಹಡಗುಗಳು ಬರಲು, ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ತನಗೆ ಇಷ್ಟ ಬಂದಂತೆ ಮಾಡುವನು. ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆಯನ್ನು ತೊರೆದವರನ್ನು ಕಟಾಕ್ಷಿಸುವನು.31ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು.32ನಿಬಂಧನ ದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.33ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ, ಅವರು ಬಹಳ ದಿನ ಕತ್ತಿ, ಬೆಂಕಿ, ಸೆರೆಸೂರೆಗಳಿಗೆ ಸಿಕ್ಕಿ ಬೀಳುವರು.34ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು. ಆ ಮೇಲೆ ಬಹಳ ಮಂದಿ ನಯವಾದ ನುಡಿಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.35ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು.ತನ್ನನ್ನು ತಾನು ಹೆಚ್ಚಿಸಿಕೊಂಡ ಅರಸನು
36<<ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.37ಅವನು ತನ್ನ ಪೂರ್ವಿಕರ ದೇವರುಗಳನ್ನಾಗಲಿ, ಸ್ತ್ರೀಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನಾಗಲಿ ಲಕ್ಷಿಸುವುದಿಲ್ಲ. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.38ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪೂರ್ವಿಕರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ವಸ್ತುಗಳಿಂದಲೂ ಸೇವಿಸುವನು.39ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು; ಯಾರನ್ನು ಕಟಾಕ್ಷಿಸುವನೋ ಅವರಿಗೆ ಮಹಿಮೆ ಹೆಚ್ಚುವುದು; ಬಹಳ ಜನರ ಮೇಲೆ ಆಳ್ವಿಕೆಯನ್ನು ನಡೆಸುವನು; ದೇಶವನ್ನು ಕ್ರಯಕ್ಕೆ ಹಂಚುವನು.ಅಂತ್ಯಕಾಲ
40<<ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು.41ಅಂದ ಚಂದದ ದೇಶಕ್ಕೂ ನುಗ್ಗುವನು. ಅನೇಕ ಸೀಮೆಗಳು ಅವನಿಂದ ಹಾಳಾಗುವವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಅವನ ಕೈಯಿಂದ ತಪ್ಪಿಸಿಕೊಳ್ಳುವರು.42ಅವನು ದೇಶಗಳ ಮೇಲೆ ಕೈಮಾಡಲು ಐಗುಪ್ತ ದೇಶವೂ ತನ್ನನ್ನು ರಕ್ಷಿಸಿಕೊಳ್ಳದು.43ಅವನು ಬೆಳ್ಳಿ ಬಂಗಾರಗಳ ನಿಧಿನಿಕ್ಷೇಪಗಳನ್ನೂ, ಐಗುಪ್ತದ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನೂ ವಶಮಾಡಿಕೊಳ್ಳುವನು. ಲೂಬ್ಯರೂ, ಕೂಷ್ಯರೂ ಅವನನ್ನು ಹಿಂಬಾಲಿಸಿ ಹೋಗುವರು.44ಹೀಗಿರಲು ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಯು ಅವನನ್ನು ಬಾಧಿಸುವುದು ಅವನು ಅತಿ ರೋಷಗೊಂಡು ಬಹಳ ಜನರನ್ನು ಧ್ವಂಸ ಮಾಡಿ, ನಿರ್ನಾಮ ಮಾಡುವುದಕ್ಕೆ ಹೊರಡುವನು.45ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.>>
12ಯುಗದ ಸಮಾಪ್ತಿ
1<<ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.2ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.3ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.4ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.>>5ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.6ಇವರಲ್ಲಿ ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡಿದ್ದ ಒಬ್ಬನು, <<ಈ ಅಪೂರ್ವ ಕಾರ್ಯಗಳು ಕೊನೆಗಾಣುವುದಕ್ಕೆ ಎಷ್ಟು ಕಾಲ ಹಿಡಿಯುವುದು?>> ಎಂದು ಕೇಳಿದನು.7ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, <<ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು>> ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.8ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ. ಆಗ ನಾನು, <<ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು?>> ಎಂದು ಪ್ರಶ್ನೆ ಮಾಡಲು,9ಅವನು, <<ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.10ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.11ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.12ಕಾದುಕೊಂಡು, ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯವರೆಗೆ ತಾಳುವವನು ಧನ್ಯನು.13ನೀನು ಹೋಗಿ ಅಂತ್ಯದ ವರೆಗೆ ವಿಶ್ವಾಸದಿಂದ ಇರು. ನೀನು ದೀರ್ಘನಿದ್ರೆಯನ್ನು ಹೊಂದಿ, ಯುಗದ ಸಮಾಪ್ತಿಯಲ್ಲಿ ಎದ್ದು, ನಿನಗಾಗುವ ಸ್ವತ್ತಿನೊಳಗೆ ನಿಲ್ಲುವಿ>> ಎಂದು ಹೇಳಿದನು.
ಮತ್ತಾಯನು ಬರೆದ ಸುವಾರ್ತೆ
1ಯೇಸು ಕ್ರಿಸ್ತನ ವಂಶಾವಳಿ
1ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.2ಅಬ್ರಹಾಮನ ಮಗನು ಇಸಾಕನು. ಇಸಾಕನ ಮಗನು ಯಾಕೋಬನು. ಯಾಕೋಬನ ಮಗನು ಯೆಹೂದನು, ಅವನ ಅಣ್ಣತಮ್ಮಂದಿರು ಯೆಹಹೂದನ ಮಕ್ಕಳು.3ಯೆಹೂದನಿಗೆ ತಾಮಾರಳಲ್ಲಿ ಪೆರೆಚನನು, ಜೆರಹನನು ಹುಟ್ಟಿದರು. ಪೆರೆಚನ ಮಗನು ಹೆಚ್ರೋನನು.4ಹೆಚ್ರೋನನ ಮಗನು ಅರಾಮನು. ಅರಾಮನ ಮಗನು ಅಮ್ಮಿನಾದಾಬನು. ಅಮ್ಮಿನಾದಾಬನ ಮಗನು ನಹಶೋನು. ನಹಶೋನ ಮಗನು ಸಲ್ಮೋನನು.5 ಸಲ್ಮೋನನ ಮಗನು ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು ಓಬೇದನು ರೂತಳಲ್ಲಿ ಹುಟ್ಟಿದವನು. ಓಬೇದನ ಮಗನು ಇಷಯನು.6ಇಷಯನ ಮಗನು ಅರಸನಾದ ದಾವೀದನು. ದಾವೀದನ ಮಗನು ಸೊಲೊಮೋನನು, ಊರೀಯನ ಹೆಂಡತಿಯಿಂದ ಹುಟ್ಟಿದವನು.7ಸೊಲೊಮೋನನ ಮಗನು ರೆಹಬ್ಬಾಮನು. ರೆಹಬ್ಬಾಮನ ಮಗನು ಅಬೀಯನನು. ಅಬೀಯನ ಮಗನು ಆಸನು.8ಆಸನ ಮಗನು ಯೆಹೋಷಾಫಾಟನು. ಯೆಹೋಷಾಫಾಟನ ಮಗನು ಯೆಹೋರಾಮನು. ಯೆಹೋರಾಮನ ಮಗನು ಉಜ್ಜೀಯನು.9ಉಜ್ಜೀಯನ ಮಗನು ಯೋತಾಮನನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು.10ಹಿಜ್ಕೀಯನ ಮಗನು ಮನಸ್ಸೆಯನು. ಮನಸ್ಸೆಯ ಮಗನು ಆಮೋನನು.11ಆಮೋನ ಮಗನು ಯೋಷಿಯನು. ಬಾಬೆಲೋನಿಗೆ ಸೆರೆಹೋದ ಸಮಯದಲ್ಲಿ ಯೋಷಿಯನಿಗೆ ಯೆಕೊನ್ಯನು, ಅವನ ಅಣ್ಣತಮ್ಮಂದಿರು ಹುಟ್ಟಿದರು.12ಬಾಬೆಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು13ಜೆರುಬ್ಬಾಬೆಲನ ಮಗನು ಅಬಿಹೂದನು. ಅಬಿಹೂದನ ಮಗನು ಎಲ್ಯಕೀಮದನು. ಎಲ್ಯಕೀಮನ ಮಗನು ಅಜೋರನು.14ಅಜೋರನ ಮಗನು ಸದೋಕನು. ಸದೋಕನ ಮಗನು ಅಖೀಮನು. ಅಖೀಮನ ಮಗನು ಎಲಿಹೂದನು.15ಎಲಿಹೂದನ ಮಗನು ಎಲಿಯಾಜರನು. ಎಲಿಯಾಜರನ ಮಗನು ಮತ್ತಾನನು. ಮತ್ತಾನನ ಮಗನು ಯಾಕೋಬನು.16ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು.17ಅಬ್ರಹಾಮನಿಂದ ದಾವೀದನ ವರೆಗೂ ಒಟ್ಟು ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿನ ದಾಸತ್ವಕ್ಕೆ ಹೋಗುವವರೆಗೂ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿನ ದಾಸತ್ವದ ದಿನದಿಂದ ಕ್ರಿಸ್ತನವರೆಗೆ ಹದಿನಾಲ್ಕು ತಲೆಮಾರುಗಳು.ಯೇಸು ಕ್ರಿಸ್ತನ ಜನನವು
18ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.19ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.20ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, <<ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.21 ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,>> ಅಂದನು.22ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ,
23 <<ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು;ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
<ದೇವರು ನಮ್ಮ ಕೂಡ ಇದ್ದಾನೆಂದು> ಈ ಹೆಸರಿನ ಅರ್ಥ.>>
24ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.25ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.
2ಜ್ಞಾನಿಗಳು ಪೂರ್ವದಿಂದ ಬಂದು ಯೇಸುವಿಗೆ ನಮಸ್ಕರಿಸಿದ್ದು
1ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,2 <<ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು>> ಎಂದರು.3ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು.4ಅವನು ಯೆಹೂದ್ಯರ ಎಲ್ಲಾ ಮುಖ್ಯಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ, <<ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ>> ಎಂದು ಅವರನ್ನು ಕೇಳಿದನು.5ಅವರು ಅವನಿಗೆ, <<ಯೂದಾಯದ ಬೇತ್ಲೆಹೇಮಿನಲ್ಲಿಯೇ; ಏಕೆಂದರೆ,
6 << <ಯೆಹೂದ ಸೀಮೆಯ ಬೇತ್ಲೆಹೇಮೇ,ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ.
ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು
ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.>
ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ>> ಎಂದು ಹೇಳಿದರು.
7ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು,8<<ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು>> ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು.9ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು.10ಅವರು ನಕ್ಷತ್ರವನ್ನು ಕಂಡು ಪರಮಾನಂದದಿಂದ ಸಂತೋಷಿಸಿದರು.11ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.12ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.ಹೆರೋದನು ಯೇಸುವನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡಿದ್ದು
13ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, <<ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು>> ಎಂದನು.14ಅದೇ ರಾತ್ರಿ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಹೆರೋದನು ತೀರಿಹೋಗುವ ತನಕ ಅವರು ಅಲ್ಲೇ ಇದ್ದರು.15ಹೀಗೆ, <<ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು>> ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.16ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರುಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.17ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು; ಅದೇನಂದರೆ,18 <<ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು>> ಎಂಬುದೇ. 19ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,20<<ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು>> ಎಂದು ಹೇಳಿದನು.21ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು.22ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.23ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, <<ಆತನು ನಜರೇತಿನವನೆಂದು ಕರೆಯಲ್ಪಡುವನು>> ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.
3ಸ್ನಾನಿಕನಾದ ಯೋಹಾನನ ಉಪದೇಶ
(ಮಾರ್ಕ 1:2-8; ಲೂಕ 3:1-18; ಯೋಹಾ. 1:6-8,19-34)
1ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ,2ಹೇಳಿದ್ದೇನೆಂದರೆ, <<ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.>>
3 << <ಕರ್ತನ ದಾರಿಯನ್ನು ಸಿದ್ಧಮಾಡಿರಿ;ಆತನ ಮಾರ್ಗವನ್ನು ಸರಾಗ ಮಾಡಿರಿ> ಎಂದು ಅಡವಿಯಲ್ಲಿ
ಕೂಗುವವನ ಶಬ್ದವಿದೆ>> ಎಂಬುದಾಗಿ ಪ್ರವಾದಿಯಾದ
ಯೆಶಾಯನಿಂದ ಸೂಚಿತನಾದವನು ಇವನೇ.
4ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.5ಆಗ ಯೇರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು,6ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.7ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, <<ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?8ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.9ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.10ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಅದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.11 ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.12ಹೊಟ್ಟನು ತೂರುವ ಮೊರವನ್ನುಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು>> ಎಂದು ಹೇಳಿದನು.ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದು
(ಮಾರ್ಕ 1:9-11; ಲೂಕ 3:21,22)
13ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು.14ಆತನಿಗೆ ಯೋಹಾನನು ತಡೆಯುತ್ತಾ, <<ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?>> ಎಂದು ಹೇಳಿದಕ್ಕೆ,15ಯೇಸು ಪ್ರತ್ಯುತ್ತರವಾಗಿ ಅವನಿಗೆ, <<ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ>> ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.16ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.17ಆಗ <<ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ>> ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.
4ಸೈತಾನನು ಯೇಸುವನ್ನು ಶೋಧಿಸಿದ್ದು
(ಮಾರ್ಕ 1:12,13; ಲೂಕ 4:1-13)
1ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು.2ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.3ಆಗ ಸೈತಾನನು ಆತನ ಬಳಿಗೆ ಬಂದು, <<ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು>> ಎಂದು ಹೇಳಲು,4ಯೇಸು, << <ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು> ಎಂದು ಬರೆದಿದೆ>> ಅಂದನು.5ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ6ಯೇಸುವಿಗೆ, <<ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; <ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು> ಎಂಬುದಾಗಿ ಬರೆದಿದೆಯಲ್ಲಾ>> ಎಂದು ಹೇಳಿದನು.7ಅದಕ್ಕೆ ಯೇಸು, <<ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ>> ಅಂದನು.8ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,9ಯೇಸುವಿಗೆ, <<ನೀನು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು>> ಅಂದನು.10ಯೇಸು ಅವನಿಗೆ, <<ಸೈತಾನನೇ, ನೀನು ತೊಲಗಿ ಹೋಗು. <ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು> ಎಂಬುದಾಗಿ ಬರೆದಿದೆಯಲ್ಲಾ>> ಎಂದು ಹೇಳಿದನು.11ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.ಯೇಸು ಗಲಿಲಾಯ ಸೀಮೆಯಲ್ಲಿ ಸುವಾರ್ತೆಯನ್ನು ಸಾರುವುದಕ್ಕೆ ಪ್ರಾರಂಭಮಾಡಿದ್ದು
(ಮಾರ್ಕ 1:14,15; ಲೂಕ 4:14,15)
12ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು.13ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನನ ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.14ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿರುವ ಮಾತು ನೆರವೇರಿತು ; ಆ ಮಾತು ಏನೆಂದರೆ,15 <<ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,16ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು>> ಎಂಬುದು.17ಅಂದಿನಿಂದ ಯೇಸು, <<ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು>> ಎಂದು ಸಾರುವುದಕ್ಕೆ ಪ್ರಾರಂಭಿಸಿದನು.ಯೇಸು ಪ್ರಥಮ ಶಿಷ್ಯರನ್ನು ಮಾಡಿಕೊಂಡಿದ್ದು
(ಮಾರ್ಕ 1:16-20; ಲೂಕ 5:2-11; ಯೋಹಾ. 1:40-42)
18ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.19ಅವರಿಗೆ ಆತನು, <<ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು>> ಎಂದು ಹೇಳುತ್ತಲೇ,20ತಕ್ಷಣ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.21ಯೇಸು ಅಲ್ಲಿಂದ ಮುಂದೆ ಹೋಗುತ್ತಿರುವಾಗ ಇನ್ನಿಬ್ಬರು ಅಣ್ಣ ತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಅವರನ್ನು ಕರೆದನು.22ಕೂಡಲೆ ಅವರು ದೋಣಿಯನ್ನು ಮತ್ತು ತಮ್ಮ ತಂದೆಯನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.ಯೇಸು ಸುವಾರ್ತೆಯನ್ನು ಸಾರಿ ಅಸ್ವಸ್ಥರನ್ನು ಗುಣಪಡಿಸಿ ಹೆಸರುವಾಸಿಯಾದದ್ದು
(ಮಾರ್ಕ 1:39; ಲೂಕ 4:15-44; 6:17-19)
23ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.24ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.25ಗಲಿಲಾಯ ದೆಕಪೊಲಿ ಯೆರೂಸಲೇಮ್ ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.
5ಯೇಸು ಪರ್ವತದ ಮೇಲೆ ಮಾಡಿದ ಪ್ರಸಂಗ
(ಲೂಕ 6:20-49; 11:1-4,9-13,33-36; 12:22-24,57-59; 16:17,18)
1ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.2ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ,
3<<ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.
4ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು. 5ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.
6ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.
7ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು.
8 ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು. 9ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.
10ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು. 11<<ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.12 ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.13<<ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.14 ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು.15ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.16ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.17<<ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ.18ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.19ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.20ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.21 << <ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು> ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ.22ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, <ಎಲೈ ಮೂರ್ಖನೇ> ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; <ಎಲೈ ನೀಚನೇ> ಎಂದು ಅನ್ನುವವನು, ಅಗ್ನಿನರಕಕ್ಕೆ ಗುರಿಯಾಗುವನು.23ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,24ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.25<<ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.26ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.27 << <ವ್ಯಭಿಚಾರ ಮಾಡಬಾರದೆಂದು> ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ.28ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.29ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.30 ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.31ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ.32ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.33<<ಮತ್ತು, ನೀನು ಸುಳ್ಳಾಣೆಯಿಡಬಾರದು; <ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ> ಹೇಳಿದೆ ಎಂದು ಕೇಳಿದ್ದೀರಷ್ಟೆ.34ಆದರೆ ನಾನು ನಿಮಗೆ ಹೇಳುವುದೇನಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು.35ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ; ಅದು ಆ ಮಹಾ ರಾಜನ ಪಟ್ಟಣವಾಗಿದೆ.36ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.37ಆದರೆ ನಿಮ್ಮ ಮಾತು <ಹೌದಾದರೆ ಹೌದು ಅಲ್ಲವಾದರೆ ಅಲ್ಲ> ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ.38<< <ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗೆಯಿಸು> ಎಂದು ಹೇಳಿರುವುದು ಕೇಳಿದ್ದೀರಷ್ಟೆ.39ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.40ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು.41ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು.42ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.43 << <ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು> ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ.44ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.45ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.46ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.47ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.48 ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.
6ದಾನಧರ್ಮದ ವಿಧಾನ
1<<ಜನರು ನೋಡಲಿ ಎಂದು ನಿಮ್ಮ <ಧರ್ಮಕಾರ್ಯಗಳನ್ನು> ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ.2<<ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.3ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ.4 ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.ಪ್ರಾರ್ಥನೆಯ ವಿಧಾನ
5<<ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.6ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.7ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ.8ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ.9ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,
10<< ಪರಲೋಕದಲ್ಲಿರುವ ನಮ್ಮ ತಂದೆಯೇ,ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ.
ನಿನ್ನ ರಾಜ್ಯವು ಬರಲಿ.
ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ
ಭೂಲೋಕದಲ್ಲಿಯೂ ನೆರವೇರಲಿ.
11ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.
12 ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆನಮ್ಮ ತಪ್ಪುಗಳನ್ನು ಕ್ಷಮಿಸು.
13ನಮ್ಮನ್ನು ಶೋಧನೆಯೊಳಗೆ ಸೇರಿಸದೆಕೆಡುಕನಿಂದ; ನಮ್ಮನ್ನು ತಪ್ಪಿಸು>>
14ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.15ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.16<<ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.17ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ.18ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.ಶಾಶ್ವತ ಸಂಪತ್ತು
19 <<ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.20ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ,21ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಹೃದಯ ಇರುತ್ತದಷ್ಟೆ.22<<ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು.23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!24<<ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.ನಿಮ್ಮ ಅಗತ್ಯಗಳಿಗಾಗಿ ಚಿಂತಿಸಬೇಡಿರಿ
25<<ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.26ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?27 ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳ ಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು?28ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;29ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ.30ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!31ಹೀಗಿರುವುದರಿಂದ, <ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು> ಎಂದು ಚಿಂತೆಮಾಡಬೇಡಿರಿ.32ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.33ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.34ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.
7ಇತರರ ಬಗ್ಗೆ ನ್ಯಾಯತೀರ್ಪು ಮಾಡಬೇಡಿ
1<<ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.2ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.3<<ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ?4ನೀನು ನಿನ್ನ ಸಹೋದರನಿಗೆ, <ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ> ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.5ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.6<<ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.ಫಲದಾಯಕ ಪ್ರಾರ್ಥನೆ
7<<ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;8ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.9<<ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ?10ಮೀನು ಕೇಳಿದರೆ ಹಾವನ್ನು ಕೊಡುವನೋ?11ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?12ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಶ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.ವಿನಾಶದ ಬಾಗಿಲು ವಿಶಾಲ
13<<ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.14ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ. ಆದುದರಿಂದ ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ.ಸುಳ್ಳ ಪ್ರವಾದಿಗಳಿದ್ದಾರೆ ಎಚ್ಚರಿಕ್ಕೆ
15<<ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.16 ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?17ಹಾಗೆಯೇ ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು;18ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು.19ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.20ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.ಕಪಟಿಗಳಿಗೆ ದೊರೆಯುವ ತೀರ್ಪು
21 ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.22ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತಿರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.23ಆಗ ನಾನು ಅವರಿಗೆ, <<ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,> ಎಂದು ಹೇಳಿಬಿಡುವೆನು.ಸ್ಥಿರವಾದ ಮನೆ
24ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.25ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.26ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.27ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.28ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.29ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.
8ಯೇಸು ದಯವುಳ್ಳ ಅದ್ಭುತಕಾರ್ಯಗಳನ್ನು ಮಾಡಿ ತನ್ನ ಮಹಿಮೆಯನ್ನು ತೋರಿಸಿದ್ದು (8:2-9,34)
ಕುಷ್ಠರೋಗಿಯನ್ನು ಸ್ವಸ್ಥ ಮಾಡಿದ್ದು (ಮಾರ್ಕ 1:40-44; ಲೂಕ 5:12-14)
1ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು.2ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, <<ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ>> ಅಂದನು.3ಆತನು ಕೈಚಾಚಿ ಆತನನ್ನು ಮುಟ್ಟಿ, <<ನನಗೆ ಮನಸ್ಸುಂಟು; ಶುದ್ಧವಾಗು>> ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.4ಆಗ ಯೇಸು ಅವನಿಗೆ; <<ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;>> ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.ಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದು
(ಲೂಕ 7:1-10,13,28,29)
5ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು,6<<ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ>> ಎಂದು ಹೇಳಿದನು.7ಯೇಸು ಅವನಿಗೆ, <<ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ>> ಎಂದು ಹೇಳಲು,8ಆ ಶತಾಧಿಪತಿಯು, <<ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.9ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ <ಹೋಗು> ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ <ಬಾ> ಎಂದು ಹೇಳಿದರೆ ಬರುತ್ತಾನೆ; <ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು> ಎಂದು ಹೇಳಿದರೆ ಮಾಡುತ್ತಾನೆ>> ಅಂದನು.10ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, <<ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.11ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;12ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು>> ಎಂದು ಹೇಳಿದನು.13ಬಳಿಕ ಯೇಸು ಆ ಶತಾಧಿಪತಿಗೆ, <<ನೀನು ನಂಬಿದಂತೆ ನಿನಗಾಗಲಿ, ಹೋಗು>> ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.ಯೇಸುವಿನ ರೋಗನಿವಾರಕ ಕಾರ್ಯ
(ಮಾರ್ಕ 1:29-34; ಲೂಕ 4:38-41)
14ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ15ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.16ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.17ಇದರಿಂದ <<ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು>> ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.ಶಿಷ್ಯರಾಗಬೇಕೆಂದಿರುವವರಿಗೆ ಬೇಲೆಕೋಡುವುದು ಅವಶ್ಯವೆಂದು ಯೇಸು ಬೋಧಿಸಿದ್ದು
(ಲೂಕ 9:57-60)
18ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು.19ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, <<ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ>> ಎಂದು ಹೇಳಲು,20ಯೇಸು ಅವನಿಗೆ, <<ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ>> ಎಂದು ಹೇಳಿದನು.21ಶಿಷ್ಯರಲ್ಲಿ ಬೇರೊಬ್ಬನು, <<ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು>> ಅನ್ನಲಾಗಿ,22ಯೇಸು ಅವನಿಗೆ, <<ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ>> ಎಂದು ಹೇಳಿದನು.ಯೇಸು ಬಿರುಗಾಳಿಯನ್ನು ನಿಲ್ಲಿಸಿದ್ದು
(ಮಾರ್ಕ 4:35-41; ಲೂಕ 8:22-25)
23ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.24ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತ್ತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು.25ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, <<ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ>> ಎಂದರು.26ಆತನು ಅವರಿಗೆ, <<ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?>> ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.27ಆ ಜನರು ಬೆರಗಾಗಿ, <<ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ>> ಅಂದರು.ಯೇಸು ಇಬ್ಬರಿಂದ ಅನೇಕ ದೆವ್ವಗಳನ್ನು ಬಿಡಿಸಿದ್ದು
(ಮಾರ್ಕ 5:1-20; ಲೂಕ 8:26-39)
28ಆ ಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರುರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.29ಅವರು, <<ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ>> ಎಂದು ಕೂಗಿದರು.30ಅವರಿಂದ ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು.31ಆ ದೆವ್ವಗಳು, <<ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು>> ಎಂದು ಬೇಡಿಕೊಂಡವು.32ಆತನು ಅವುಗಳಿಗೆ, <<ಹೋಗಿರಿ>> ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಅ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು.33ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು;34ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
91ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು.ಯೇಸು ಪಾರ್ಶ್ವವಾಯುರೋಗಿಯ ಪಾಪವನ್ನು ಕ್ಷಮಿಸಿ ಸ್ವಸ್ಥಮಾಡಿದ್ದು
(ಮಾರ್ಕ 2:1-12; ಲೂಕ 5:17-26)
2ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, <<ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ>> ಎಂದು ಹೇಳಿದನು.3ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, <<ಇವನು ದೇವದೂಷಣೆ ಮಾಡುತ್ತಾನೆಂದು>> ತಮ್ಮತಮ್ಮೊಳಗೆ ಮಾತನಾಡಿಕೊಂಡರು.4ಯೇಸು ಅವರ ಆಲೋಚನೆಗಳನ್ನು ತಿಳಿದು, <<ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?5ಯಾವುದು ಸುಲಭ? <ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ> ಎಂದು ಅನ್ನುವುದೋ?6ಅಥವಾ <ಎದ್ದು ನಡೆ> ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು>> ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, <<ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು>> ಅಂದನು.7ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.8ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.ಯೇಸು ಮತ್ತಾಯನನ್ನು ಕರೆದದ್ದು
(ಮಾರ್ಕ 2:13-; ಲೂಕ 5:27-32)
9ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, <<ನನ್ನನ್ನು ಹಿಂಬಾಲಿಸು>> ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.10ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು.11ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, <<ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?>> ಎಂದು ಕೇಳಿದರು.12ಯೇಸು ಅದನ್ನು ಕೇಳಿ, <<ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.13ನೀವು ಹೋಗಿ, <ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ> ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು>> ಅಂದನು.ಉಪವಾಸದ ವಿಷಯವಾಗಿ ಪ್ರಶ್ನೆ (ಮಾರ್ಕ 2:18-22; ಲೂಕ 5:33-39)
14ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, <<ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ>> ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ,15<<ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ16ಆ ತ್ಯಾಪೆಯು ಹಳೆ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.17ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು>> ಎಂದು ಹೇಳಿದನು.ಯೇಸು ಒಬ್ಬ ಹುಡುಗಿಯನ್ನು ಬದುಕಿಸಿದ್ದು; ಇನ್ನೂ ಕೆಲವು ಅದ್ಭುತಗಳನ್ನು ನಡೆಸಿದ್ದು
(ಮಾರ್ಕ 5:22-43; ಲೂಕ 8:41-56)
18ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, <<ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು>> ಎಂದು ಬೇಡಿಕೊಂಡನು.19ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು.20ಆಗ ಹನ್ನೆರಡು ವರುಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು,21<<ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ>> ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.22ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, <<ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು>> ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.23ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ,24<<ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ>> ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು.25ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು.26ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.27ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, <<ದಾವೀದ ಕುಮಾರನೇ, ನಮ್ಮನ್ನು ಕರುಣಿಸು>> ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.28ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, <<ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ>> ಎಂದು ಕೇಳಿದ್ದಕ್ಕೆ, ಅವರು <<ಹೌದು, ಕರ್ತನೇ, ನಂಬುತ್ತೇವೆ>> ಅಂದರು.29ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ, <<ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ>> ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು.30ನಂತರ ಯೇಸು ಅವರಿಗೆ, <<ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ>> ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.31ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.32ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು.33ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, <<ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು>> ಆಶ್ಚರ್ಯಚಕಿತರಾದರು.34ಆದರೆ ಫರಿಸಾಯರು, <<ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ>> ಎಂದು ಹೇಳಿದರು.ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಆರಿಸಿಕೊಂಡು ಸುವಾರ್ತೆಯನ್ನು ಸಾರುವುದಕ್ಕೆ ಕಳುಹಿಸಿದ್ದು
(ಮಾರ್ಕ 3:13-19; 6:6-13; ಲೂಕ 6:12-16; 9:1-6)
35ತರುವಾಯ ಯೇಸು ಎಲ್ಲಾ ಪಟ್ಟಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.36ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.37ಆತನು ತನ್ನ ಶಿಷ್ಯರಿಗೆ, <<ಬೆಳೆಯು ಬಹಳ ಇದೆ, ಆದರೆ ಕೆಲಸದವರು ಸ್ವಲ್ಪ.38ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ>> ಎಂದು ಹೇಳಿದನು.
101ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.2ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,3ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕ ವಸೂಲಿಗಾರನಾದ ಮತ್ತಾಯ, ಅಲ್ಫಾಯನ ಮಗ ಯಾಕೋಬ, ತದ್ದಾಯ,4ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಎಂಬಿವರುಗಳೇ.5ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, <<ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;6ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.7<ಪರಲೋಕ ರಾಜ್ಯವು ಸಮೀಪವಾಯಿತೆಂದು> ಸಾರಿಹೇಳುತ್ತಾ ಹೋಗಿರಿ.8ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.9ನಿಮ್ಮ ಕೈ ಚೀಲಗಳಲ್ಲಿ ಚಿನ್ನ, ಹಣ ದುಡ್ಡುಗಳನ್ನೂ, ದಾರಿಗೆ ಪ್ರಯಾಣದ ಚೀಲಗಳನ್ನೂ,10ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.11ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.12ಆ ಮನೆಯೊಳಗೆ ಹೋಗುವಾಗ ಶುಭವಾಗಲಿ ಅನ್ನಿರಿ.13ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ.14ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.15 ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.16<<ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.17ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.18ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.19ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು.20ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು.21ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.22ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.23ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.24 <<ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಒಡೆಯನಿಗಿಂತ ಆಳು ದೊಡ್ಡವನಲ್ಲ.25ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?26ಆದರೂ ಅವರಿಗೆ ಹೆದರಬೇಡಿರಿ. ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ.27ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.28ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.29ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು.30ನಿಮ್ಮ ತಲೆಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.31ಆದುದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚು ಬೆಲೆಬಾಳುವವರಾಗಿದ್ದೀರಿ.32<<ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.33ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.34 <<ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು.35ಹೇಗಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು.36 ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ಶತ್ರುಗಳಾಗಿರುವರು.37ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.38ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ.39ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಾಪಾಡಿಕೊಳ್ಳುತ್ತಾನೆ.40 <<ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುವವನಾಗಿದ್ದಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುವವನಾಗಿದ್ದಾನೆ.41ಪ್ರವಾದಿಯನ್ನು ಪ್ರವಾದಿಯೆಂದು ಸ್ವಾಗತಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವಾಗತಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.42ಮತ್ತು ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ>> ಅಂದನು.
111ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.ಸ್ನಾನಿಕ ಯೋಹಾನನು ಮಾಡಿದ ವಿಚಾರಣೆಗೆ ಯೇಸು ಉತ್ತರ ಕೊಟ್ಟದ್ದು
2 ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,3<<ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ>> ಎಂದು ಅವರ ಮೂಲಕ ಹೇಳಿ ಕೇಳಿಸಿದನು.4ಯೇಸು ಅವರಿಗೆ ಪ್ರತ್ಯುತ್ತರವಾಗಿ, <<ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ;5ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.6ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು>> ಎಂದು ಹೇಳಿದನು.7ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, <<ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?8ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.9ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ.10 <ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು> ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ.11ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.12ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ.13ಎಲ್ಲಾ ಪ್ರವಾದಿಗಳೂ, ಧರ್ಮನಿಯಮವು ಯೋಹಾನನ ತನಕ ಪ್ರವಾದಿಸಿದರು.14ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ.15ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.16ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ,17<ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ> ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.18ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, <ದೆವ್ವ ಹಿಡಿದಿದೆ> ಅನ್ನುತ್ತಾರೆ.19ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು <ಇಗೋ ಇವನು ಹೊಟ್ಟೆಬಾಕನು ಕುಡುಕನು ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು> ಅನ್ನುತ್ತಾರೆ. ಆದರೆ ಜ್ಞಾನವು ಅದರ ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ>> ಅಂದನು.ಯೇಸು ಮಾನಸಾಂತರಪಡದ ಪಟ್ಟಣದವರನ್ನು ಗದರಿಸಿದ್ದು
(ಲೂಕ 10:12—15:21-22)
20ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.21ಹೇಗಂದರೆ, <<ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.22ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.23ಎಲೈ ಕಪೆರ್ನೌಮೇ ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.24ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು>> ಎಂದು ನಿಮಗೆ ಹೇಳುತ್ತೇನೆ ಅಂದನು.25ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, <<ತಂದೆಯೇ! ಪರಲೋಕದ ಭೂಪಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಂಥವರಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.26ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು.27 ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.ಯೇಸುವಿನಿಂದ ವಿಶ್ರಾಂತಿಯ ಆಹ್ವಾನ
28<<ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.29 ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.30ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ>> ಅಂದನು.
12ಯೇಸು ಸಬ್ಬತ್ ದಿನವನ್ನು ಅಲಕ್ಷ್ಯಮಾಡುತ್ತಾನೆಂದು ಫರಿಸಾಯರು ಆತನ ಮೇಲೆ ಆಕ್ಷೇಪಣೆ ಮಾಡಿದ್ದು
(ಮಾರ್ಕ 2:23; 3:6; ಲೂಕ 6:1-11)
1ಆ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.2ಆದರೆ ಫರಿಸಾಯರು ಅದನ್ನು ಕಂಡು, <<ನೋಡು ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ>> ಎಂದು ಆತನಿಗೆ ಹೇಳಿದರು.3ಆತನು ಅವರಿಗೆ, <<ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?4ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.5ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಹೊಲೆಮಾಡಿದಾಗ್ಯೂ ಅವರು ನಿರಪರಾಧಿಗಳಾಗಿದ್ದಾರೆ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ?6 ಆದರೆ ಇಲ್ಲಿ ದೇವಾಲಯಕ್ಕಿಂತ ದೊಡ್ಡವನು ಇದ್ದಾನೆಂದು ನಿಮಗೆ ಹೇಳುತ್ತೇನೆ.7 <ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ> ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡುತ್ತಿರಲಿಲ್ಲಾ.8ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಕರ್ತನಾಗಿದ್ದಾನೆಂದು>> ಹೇಳಿದನು.9ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರಕ್ಕೆ ಹೋದನು.10ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, <<ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?>> ಎಂದು ಕೇಳಿದರು.11ಅದಕ್ಕಾತನು, <<ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ?12ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದೆ>> ಎಂದು ಉತ್ತರ ಕೊಟ್ಟನು.13ತರುವಾಯ ಯೇಸು ಆ ಮನುಷ್ಯನಿಗೆ <<ನಿನ್ನ ಕೈ ಚಾಚು>> ಎಂದು ಹೇಳಿದನು. ಅವನು ಚಾಚಿದನು. ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು.14ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು.ಯೇಸು ದೇವರು ಆರಿಸಿಕೊಂಡ ಸೇವಕ
15ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.16ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತನ್ನ ಬಗ್ಗೆ ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು.17ಹೀಗೆ ಯೆಶಾಯನೆಂಬ ಪ್ರವಾದಿಯ ಮೂಲಕ ಹೇಳಿಸಿರುವ ಮಾತು ನೆರವೇರಿತು; ಅದೇನೆಂದರೆ,18 <<ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.19ಈತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವುದಿಲ್ಲ.20ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.21ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.>>ಯೇಸು ಮತ್ತು ಬೆಲ್ಜೆಬೂಲನು
(ಮಾರ್ಕ 3:22-30; ಲೂಕ 11:14-32; 12:10)
22ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.23ಅದಕ್ಕೆ ಜನರೆಲ್ಲರೂ ಬೆರಗಾಗಿ, <<ಈತನು ದಾವೀದನ ಕುಮಾರನೇ ಇರಬಹುದೇನೋ>> ಎಂದು ಮಾತನಾಡಿಕೊಳ್ಳುತ್ತಿದ್ದರು.24ಆದರೆ ಫರಿಸಾಯರು ಅದನ್ನು ಕೇಳಿ, <<ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ>> ಅಂದರು.25ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, <<ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇಧ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.26ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನ ವಿರುದ್ಧವಾಗಿ ಹೋರಾಡಿದ ಹಾಗಾಯಿತು, ಹಾಗಾದರೆ ಅವನ ರಾಜ್ಯವು ಹೇಗೆ ನಿಂತಿತು?27ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು.28ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?29ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.30 ನನ್ನ ಸಂಗಡ ಇರದವನು ನನಗೆ ವಿರೋಧಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದುರಿಸುವವನಾಗಿದ್ದಾನೆ.31ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.32ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ.ಮರ ಮತ್ತು ಫಲ
33 ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.34ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.35ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.36ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.37ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ>> ಅಂದನು.ಫರಿಸಾಯರು ಸೂಚಕಕಾರ್ಯವನ್ನು ನೋಡಬೇಕೆಂದು ಕೇಳಿದ್ದು
38ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು, <<ಬೋಧಕನೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು>> ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ,39 <<ವ್ಯಭಿಚಾರಿಣಿ ಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತಾರೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ.40ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.41ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು.42ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.ವಿಶ್ರಾಂತಿ ಸಿಕ್ಕದ ದೆವ್ವ
43<<ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.44ವಿಶ್ರಾಂತಿ ಸಿಕ್ಕದ ಕಾರಣ ಅದು, <ನಾನು ಬಿಟ್ಟು ಬಂದ ನನ್ನ ಮನೆಗೆ ತಿರುಗಿ ಹೋಗುತ್ತೇನೆ> ಅಂದುಕೊಂಡು ಬಂದು ಆ ಮನೆ ಒಕ್ಕಲಿಲ್ಲದ್ದೂ, ಗುಡಿಸಿ, ಅಲಂಕರಿಸಿರುವುದನ್ನು ಕಂಡು,45ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು>> ಅಂದನು.ದೇವರ ಚಿತ್ತವನ್ನು ಅನುಸರಿಸುವವರೇ ತನ್ನ ಸಂಬಂಧಿಕರೆಂದು ಯೇಸು ಹೇಳಿದ್ದು
(ಮಾರ್ಕ 3:31-35; ಲೂಕ 8:19-21)
46ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.47ಆಗ ಒಬ್ಬನು, <<ಇಗೋ ನಿನ್ನ ತಾಯಿಯೂ ತಮ್ಮಂದಿರೂ ನಿನ್ನನ್ನು ಮಾತನಾಡಿಸಬೇಕೆಂದು ಹೊರಗೆ ನಿಂತಿದ್ದಾರೆ>> ಅಂದನು.48ಅದಕ್ಕಾತನು ಆ ಮಾತು ಹೇಳಿದವನಿಗೆ, <<ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?>> ಎಂದು ಹೇಳಿ49ಶಿಷ್ಯರ ಕಡೆಗೆ ಕೈ ಚಾಚಿ, <<ಇಗೋ ನನ್ನ ತಾಯಿ, ನನ್ನ ಸಹೋದರರು.50ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ>> ಆಗಿದ್ದಾರೆ ಅಂದನು.
13ಪರಲೋಕ ರಾಜ್ಯವನ್ನು ಕುರಿತ ಸಾಮ್ಯಗಳು
(ಮಾರ್ಕ 4:1-20,30-34; ಲೂಕ 8:4-15; 13:18,19)
ಬಿತ್ತುವವನ ಸಾಮ್ಯ
1ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು.2ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು. ಆ ಜನರೆಲ್ಲರೂ ದಡದಲ್ಲಿ ನಿಂತಿದ್ದರು.3ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು.4<<ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು.5ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು.6ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.7ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.8ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು.9ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ>> ಅಂದನು.10ತರುವಾಯ ಆತನ ಶಿಷ್ಯರು ಬಂದು, <<ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?>> ಎಂದು ಕೇಳಿದರು.11ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, <<ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.12ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.13ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ಗ್ರಹಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ.
14<<ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನಂದರೆ, <ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ.
ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.
15ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು.ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ,
ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು
ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ> >> ಎಂಬುದೇ.
16<<ಆದರೆ ನೀವು ಧನ್ಯರು ಏಕೆಂದರೆ ನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ.17ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ.18<<ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ.19ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.20ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,21ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.22ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.23ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ.>> ಎಂದು ಹೇಳಿದನು.ಗೋದಿ ಮತ್ತು ಕಳೆಗಳ ಸಾಮ್ಯ
24ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನಂದರೆ, <<ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.25ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು.26ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು.27ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, <ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?> ಎಂದು ಕೇಳಿದರು.28ಅದಕ್ಕೆ ಅವನು, <ಇದು ವೈರಿ ಮಾಡಿದ ಕೆಲಸ> ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, <ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮ್ಮಗೆ ಇಷ್ಟವಿದೆಯೋ?> ಎಂದು ಕೇಳಿದರು.29ಅವರಿಗೆ ಅವನು, <ಬೇಡ, ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ.30ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು> >> ಅಂದನು.ಸಾಸಿವೆಕಾಳಿನ ಮತ್ತು ಹುಳಿಹಿಟ್ಟಿನ ಸಾಮ್ಯ
31ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನಂದರೆ, <<ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.32ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ>> ಎಂದು ಹೇಳಿದನು.33ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನಂದರೆ, <<ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.>>34ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು. ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ.35ಹೀಗೆ, <<ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು>> ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.36ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.37ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, <<ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು.38ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ ರಾಜ್ಯದ ಮಕ್ಕಳು.39ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.40ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು.41 ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.42ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು43ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು.ಅಡಗಿಸಿದ್ದ ನಿಧಿ, ಮುತ್ತುಗಳ ಮತ್ತು ಬಲೆಯ ಸಾಮ್ಯ
44<<ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.45ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.46ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.47<<ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ.48ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು.49ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.50ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.51<<ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ>> ಎಂದು ಕೇಳಲು, ಶಿಷ್ಯರು, <<ಅರ್ಥವಾಯಿತು>> ಅಂದರು.52ಆಗ ಆತನು ಅವರಿಗೆ, <<ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ>> ಎಂದು ಹೇಳಿದನು.53ಯೇಸು ಈ ಸಾಮ್ಯಗಳನ್ನು ಹೇಳಿ ಮುಗಿಸಿದ ಮೇಲೆ ಅಲ್ಲಿಂದ ಹೊರಟು ಹೋದನು.ಯೇಸುವಿನನ್ನು ನಾಜರೆತ್ ಊರಿನವರು ತಾತ್ಸಾರ ಮಾಡಿದ್ದು
(ಮಾರ್ಕ 6:1-6; ಲೂಕ 4:15-30)
54ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, <<ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?55ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ?56ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು?>> ಎಂದು ಅಂದುಕೊಂಡು ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು.57ಆದರೆ ಯೇಸುವು ಅವರಿಗೆ <<ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ>> ಅಂದನು.58ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ.
14ಹೆರೋದನು ಸ್ನಾನಿಕನಾದ ಯೋಹಾನನ್ನು ಕೊಲ್ಲಿಸಿದ ಮೇಲೆ ಯೇಸುವಿನ ಸುದ್ದಿಯನ್ನು ಕೇಳಿ ದಿಗಿಲುಪಟ್ಟದ್ದು
(ಮಾರ್ಕ 6:14-29; ಲೂಕ 9:7-9)
1ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,2ತನ್ನ ಸೇವಕರಿಗೆ, <<ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ>> ಎಂದು ಹೇಳಿದನು.3ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.4ಯೋಹಾನನು ಹೆರೋದನಿಗೆ <<ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು>> ಹೇಳುತ್ತಿದ್ದನು.5ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.6ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.7ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಅಣೆಯಿಟ್ಟು ವಾಗ್ದಾನ ಮಾಡಿದನು.8ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, <<ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು>> ಅಂದಳು.9ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಅಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು.10ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,11ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.12ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು.ಯೇಸು ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು
(ಮಾರ್ಕ 6:30-44; ಲೂಕ 9:10-17; ಯೋಹಾ. 6:1-14)
13ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.14ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.15ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, <<ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು>> ಎಂದು ಹೇಳಿದರು.16ಆದರೆ ಯೇಸು, <<ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ>> ಅಂದನು.17ಅದಕ್ಕವರು, <<ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ>> ಅನ್ನಲಾಗಿ,18ಆತನು, <<ಅವುಗಳನ್ನು ನನಗೆ ತಂದು ಕೊಡಿರಿ>> ಅಂದನು.19ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರ ಕೊಟ್ಟರು.20ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.21ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು.ಯೇಸು ಸಮುದ್ರದ ಮೇಲೆ ನಡೆದದ್ದು
(ಮಾರ್ಕ 6:45-52; ಯೋಹಾ. 6:15-21)
22ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.23ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.24ಆದರೆ ದೋಣಿಯು ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.25ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು.26ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು <<ಭೂತವೆಂದು>> ದಿಗಿಲುಬಿದ್ದು ಭಯದಿಂದ ಕೂಗಿದರು.27ಕೂಡಲೆ ಯೇಸು ಮಾತನಾಡಿ ಅವರಿಗೆ, <<ಧೈರ್ಯವಾಗಿರಿ ನಾನೇ ಭಯಪಡಬೇಡಿರಿ>> ಎಂದು ಹೇಳಿದನು.28ಅದಕ್ಕೆ ಪೇತ್ರನು, <<ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು>> ಅನ್ನಲು,29ಆತನು, <<ಬಾ>> ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.30ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, <<ಕರ್ತನೇ, ನನ್ನನ್ನು ಕಾಪಾಡು>> ಎಂದು ಕೂಗಿಕೊಂಡನು.31ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, <<ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ>> ಎಂದು ಹೇಳಿದನು.32ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.33ಆಗ ದೋಣಿಯಲ್ಲಿದ್ದ ಶಿಷ್ಯರು <<ನಿಜವಾಗಿ ನೀನು ದೇವಕುಮಾರನು>> ಎಂದು ಹೇಳಿ ಆತನನ್ನು ಆರಾಧಿಸಿದರು.34ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪಟ್ಟಣದ ದಡಕ್ಕೆ ಬಂದರು.35ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು.36ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.
15ಊಟದಿಂದ ಮನುಷ್ಯನು ಕೆಡುವುದಿಲ್ಲವೆಂದು ಯೇಸು ಬೋಧಿಸಿದ್ದು
(ಮಾರ್ಕ 7:1-23)
1ತರುವಾಯ ಯೆರೂಸಲೇಮಿನಿಂದ ಫರಿಸಾಯರೂ, ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು,2<<ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ>> ಎಂದು ಕೇಳಿದರು.3ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, <<ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?4ಹೇಗಂದರೆ <ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ> ದೇವರು ಹೇಳಿದ್ದಾನೆ.5ನೀವೋ, <ಯಾವನಾದರೂ ತನ್ನ ತಂದೆಯನಾಗಲಿ, ತಾಯಿಯಾನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ> ಎಂದು ಹೇಳಿದರೆ,6ಅವನು <ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ> ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.7ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ,
8 <<ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
9ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು>> ಎಂಬುದೇ. 10ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ, <<ಕೇಳಿ ತಿಳಿದುಕೊಳ್ಳಿರಿ,11ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು>> ಎಂದು ಹೇಳಿದನು.12ಆಗ ಶಿಷ್ಯರು ಬಂದು ಆತನನ್ನು, <<ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ>> ಎಂದು ಕೇಳಿದರು.13ಅದಕ್ಕೆ ಆತನು <<ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲ್ಪಡುವವು.14ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು>> ಅಂದನು.15ಆಗ ಪೇತ್ರನು, <<ಈ ಸಾಮ್ಯವನ್ನು ನಮಗೆ ವಿವರಿಸಿ ಹೇಳು>> ಅಂದನು,16ಅದಕ್ಕೆ ಯೇಸು, <<ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ?17ಬಾಯೊಳಕ್ಕೆ ಹೋಗುವಂಥದ್ದು ಹೊಟ್ಟೆಯಲ್ಲಿ ಸೇರಿ ವಿಸರ್ಜಿತವಾಗುತ್ತದೆಂದು ನಿಮಗೆ ತಿಳಿಯಲಿಲ್ಲವೋ?18ಆದರೆ ಬಾಯೊಳಗಿಂದ ಹೊರ ಬರುವಂಥವುಗಳು ಹೃದಯದಿಂದ ಬರುತ್ತವೆ. ಇವೇ ಮನುಷ್ಯನನ್ನು ಅಶುದ್ಧಿಮಾಡುವವು.19ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.20ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ.>> ಅಂದನು.ಕಾನಾನ್ಯ ಸ್ತ್ರೀಯ ನಂಬಿಕೆ
(ಮಾರ್ಕ 7:24-30)
21ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತಗಳಿಗೆ ಹೋದನು.22ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, <<ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ>> ಎಂದು ಕೂಗಿಕೊಂಡಳು.23ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, <<ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು>> ಎಂದು ಆತನನ್ನು ಬೇಡಿಕೊಂಡರು.24ಆದರೆ ಯೇಸು ಹೇಳಿದ್ದೇನೆಂದರೆ <<ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ>> ಅಂದನು.25ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, <<ಕರ್ತನೇ ನನಗೆ ಸಹಾಯಮಾಡು>> ಅಂದಳು.26ಅದಕ್ಕಾತನು, <<ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ>> ಎಂದು ಉತ್ತರಕೊಟ್ಟನು.27ಆಕೆಯು, <<ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ>> ಅಂದಳು.28ಆಗ ಯೇಸು ಆಕೆಗೆ, <<ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ>> ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು.ಯೇಸು ಅನೇಕರನ್ನು ಸ್ವಸ್ಥಮಾಡಿದ್ದು
29ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು.30ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.31ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ, ಕುಂಟರು ನಡೆದಾಡುವುದನ್ನೂ, ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು.ನಾಲ್ಕು ಸಾವಿರ ಜನರಿಗೆ ಊಟಮಾಡಿಸಿದ್ದು
(ಮಾರ್ಕ 8:1-10)
32ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, <<ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು>> ಎಂದು ಹೇಳಿದನು.33ಶಿಷ್ಯರು ಆತನಿಗೆ, <<ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?>> ಎಂದು ಹೇಳಿದರು.34ಅದಕ್ಕೆ ಯೇಸು, <<ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?>> ಎಂದು ಕೇಳಿದ್ದಕ್ಕೆ ಅವರು, <<ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ>> ಅಂದರು.35ಆಗ ಆತನು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು.36ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.37ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.38ಊಟಮಾಡಿದವರು ಹೆಂಗಸರು ಮಕ್ಕಳು ಅಲ್ಲದೆ ಗಂಡಸರೇ ನಾಲ್ಕು ಸಾವಿರವಿದ್ದರು.39ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು.
16ಫರಿಸಾಯರು ಮತ್ತು ಸದ್ದುಕಾಯರು ಸೂಚಕಕಾರ್ಯವನ್ನು ಕೇಳಿದ್ದು
(ಮಾರ್ಕ 9:11-21)
1ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.2 ಆತನು ಅವರಿಗೆ, << <ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ> ಅನ್ನುತ್ತೀರಿ.3ಬೆಳಗ್ಗೆ, <ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ> ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?4 ವ್ಯಭಿಚಾರಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ>> ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.ಯೇಸು ಫರಿಸಾಯರ ಮತ್ತು ಸದ್ದುಕಾಯರ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು
5ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು.6ಯೇಸು ಅವರಿಗೆ <<ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ>> ಎಂದು ಹೇಳಿದನು.7ಅದಕ್ಕೆ ಅವರು, <<ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ>> ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.8ಯೇಸು ಅದನ್ನು ತಿಳಿದು, <<ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?9ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ?10ಇಲ್ಲವೆ ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?11ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ>> ಅಂದನು.12ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.ಪೇತ್ರನು ಯೇಸುವನ್ನು ಕ್ರಿಸ್ತನೆಂದು ಅರಿಕೆಮಾಡಿದ್ದು
(ಮಾರ್ಕ 8:27-29; ಲೂಕ 9:18-21)
13ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತಕ್ಕೆ ಬಂದಾಗ, <<ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ>> ಎಂದು ತನ್ನ ಶಿಷ್ಯರನ್ನು ಕೇಳಿದನು.14ಅವರು, <<ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು>> ಅನ್ನುತ್ತಾರೆ ಎಂದು ಹೇಳಿದರು.15ಆತನು ಅವರನ್ನು, <<ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?>>16ಆಗ ಸೀಮೋನ ಪೇತ್ರನು, <<ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು>> ಎಂದು ಉತ್ತರ ಕೊಟ್ಟನು.17ಅದಕ್ಕೆ ಯೇಸು, <<ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು>> ಎಂದು ಹೇಳಿದನು.18ನಾನು ಇದನ್ನು ಸಹ ನಿನಗೆ ಹೇಳುತ್ತೇನ, <<ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.19ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು>> ಅಂದನು.20ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.ಯೇಸು ತನ್ನ ಮರಣವನ್ನು ಮತ್ತು ಪುನರುತ್ಥಾನವನ್ನು ಮುಂತಿಳಿಸಿದು
(ಮಾರ್ಕ 8:31—9:1; ಲೂಕ 9:22-27)
21ಅಂದಿನಿಂದ ಯೇಸು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.22ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, <<ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು>> ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.23ಆತನು ತಿರುಗಿಕೊಂಡು ಪೇತ್ರನಿಗೆ, <<ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳಹಾಗೇ ಯೋಚಿಸದೇ ಮನುಷ್ಯರ ವಿಷಯಗಳಂತ್ತೆ ಯೋಚಿಸುತ್ತೀ>> ಎಂದು ಹೇಳಿದನು.24ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ <<ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.25ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.26ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?27ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.28<<ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ>> ಅಂದನು.
17ಯೇಸು ರೂಪಾಂತರಗೊಂಡಿದ್ದು
(ಮಾರ್ಕ 9:2-13; ಲೂಕ 9:28-36)
1ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.2ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.3ಇಗೋ, ಮೋಶೆಯೂ ಎಲೀಯನೂ ಆತನ ಸಂಗಡ ಮಾತನಾಡುತ್ತಾ ಅವರಿಗೆ ಕಾಣಿಸಿಕೊಂಡರು.4ಆಗ ಪೇತ್ರನು ಯೇಸುವಿಗೆ, <<ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು>> ಎಂದು ಹೇಳಿದನು.5ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ <<ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ>> ಎಂದು ಹೇಳುವ ವಾಣಿವುಂಟಾಯಿತು.6ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.7ಆದರೆ ಯೇಸು ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, ಏಳಿರಿ ಹೆದರಬೇಡಿರಿ ಅಂದನು.8ಅವರು ಕಣ್ಣೆತ್ತಿ ಮೇಲೆ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ.9ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, <<ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದೆಂದು>> ಆಜ್ಞಾಪಿಸಿದನು.10ಆಗ ಆತನ ಶಿಷ್ಯರು, <<ಎಲೀಯನು ಮೊದಲು ಬರುವುದು ಅವಶ್ಯವೆಂಬುದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ ಏಕೆ?>> ಎಂದು ಆತನನ್ನು ಕೇಳಿದರು.11ಯೇಸು ಅವರಿಗ, <<ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.12ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು>> ಎಂದು ಉತ್ತರ ಕೊಟ್ಟನು.13ಸ್ನಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು.ಮೂರ್ಛೆರೋಗಿಯನ್ನು ಸ್ವಸ್ಥಮಾಡಿದ್ದು
(ಮಾರ್ಕ 9:14-29; ಲೂಕ 9:37-42)
14ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ,15<<ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.16ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ>> ಅಂದನು.17ಅದಕ್ಕೆ ಯೇಸು, <<ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ>> ಅಂದನು.18ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.19ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, <<ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?>>20ಆತನು ಅವರಿಗೆ, <<ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,21ನೀವು ಈ ಬೆಟ್ಟಕ್ಕೆ, <ಇಲ್ಲಿಂದ ಅಲ್ಲಿಗೆ ಸರಿದು ಹೋಗು> ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ>> ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು. ಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂತಿಳಿಸಿದ್ದು
(ಮಾರ್ಕ 9:30-32; ಲೂಕ 9:43-45)
22ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, <<ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.23ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು>> ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.ಯೇಸು ದೇವಾಲಯದ ತೆರಿಗೆಯನ್ನು ಕೊಟ್ಟ ರೀತಿಯಿಂದ ತಾನು ದೇವಕುಮಾರನೆಂದು ತೋರಿಸಿದ್ದು
24ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, <<ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ>> ಎಂದು ಕೇಳಲು, <<ಹೌದು ಕಟ್ಟುವನು>> ಅಂದನು.25ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನುಗೆ, <<ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?>> ಎಂದು ಕೇಳಿದನು.26ಅವನು, <<ಪರರಿಂದ>> ಎಂದು ಉತ್ತರ ಕೊಡಲು, ಯೇಸು ಅವನಿಗೆ, <<ಹಾಗಾದರೆ ಪ್ರಜೆಗಳು ಅದ್ದನ್ನು ಕೊಡಬೇಕಾಗಿಲ್ಲವೇ.27ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು>> ಎಂದು ಹೇಳಿದನು.
18ದೇವರ ರಾಜ್ಯದಲ್ಲಿ ದೊಡ್ಡವನು
(ಮಾರ್ಕ 9:33-37; ಲೂಕ 9:46-48)
1ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, <<ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?>> ಎಂದು ಕೇಳಿದರು.2ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ,3ಅವರಿಗೆ, <<ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.4ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.5ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.6ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.7<<ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.8 ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.9ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.10ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.11ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು.ಕಳೆದುಹೋದ ಕುರಿಯ ಸಾಮ್ಯ
12<<ನಿಮ್ಮಲ್ಲಿ ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?13ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.14ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.ತಪ್ಪು ಮಾಡಿದ ಸಹೋದರನನ್ನು ಸರಿಪಡಿಸಿದ್ದು
15ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ಹೋಗಿ ನೀನೂ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.16ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರದುಕೊಂಡು ಹೋಗು.17ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.18<<ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.19 ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.20ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ>> ಅಂದನು.ಕರುಣೆಯಿಲ್ಲದ ಸೇವಕನ ಸಾಮ್ಯ
21ಆಗ ಪೇತ್ರನು ಆತನ ಬಳಿಗೆ ಬಂದು, <<ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?>> ಎಂದು ಕೇಳಿದನು.22ಯೇಸು ಅವನಿಗೆ, <<ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.23ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.24ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗ ಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು.25ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.26ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, <ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು> ಹೇಳಿದನು.27ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.28ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, <ನನ್ನ ಸಾಲ ತೀರಿಸು> ಎಂದು ಹೇಳಿದನು.29ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, <ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ> ಎಂದು ಬೇಡಿಕೊಂಡನು.30ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.31ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು.32ಆಗ ಅವನ ಒಡೆಯನು ಅವನನ್ನು ಕರಸಿ, <ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ?.33ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?> ಎಂದು ಹೇಳಿ,34ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು.35 ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು>> ಅಂದನು.
19ಯೇಸು ವಿವಾಹ ವಿಚ್ಛೇದನ ವಿಷಯವಾಗಿ ಭೋದಿಸಿದ್ದು
(ಮಾರ್ಕ 10:1-12)
1ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು.2ಜನರ ದೊಡ್ಡ ಗುಂಪುಗಳು ಆತನನ್ನು ಹಿಂಬಾಲಿಸಿದವು, ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು.3ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, <<ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?>> ಎಂದು ಕೇಳಲು,4ಆತನು ಪ್ರತ್ಯುತ್ತರವಾಗಿ, <<ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,5 <ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?>6ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು>> ಅಂದನು.7ಅದಕ್ಕೆ ಅವರು ಆತನನ್ನು, <<ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?>> ಎಂದು ಕೇಳಿದರು.8ಅದಕ್ಕೆ ಯೇಸು ಅವರಿಗೆ, <<ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು.9ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ>> ಎಂದು ನಿಮಗೆ ಹೇಳುತ್ತೇನೆ ಅಂದನು.10ಅದಕ್ಕೆ ಶಿಷ್ಯರು ಯೇಸುವಿಗೆ, <<ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ>> ಅಂದರು.11ಆದರೆ ಯೇಸು ಅವರಿಗೆ, <<ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು.12ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ>> ಎಂದು ಹೇಳಿದನು.ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು
(ಮಾರ್ಕ 10:13-16; ಲೂಕ 13:15-17)
13ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.14ಆದರೆ ಯೇಸು, <<ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ>> ಎಂದು ಹೇಳಿದನು.15ಮತ್ತು ಅವರ ಮೇಲೆ ಕೈಯಿಟ್ಟು ಅನಂತರ ಅಲ್ಲಿಂದ ಹೊರಟು ಹೋದನು.ಐಶ್ವರ್ಯವಂತನಾದ ಯುವಕನು
(ಮಾರ್ಕ 10:17-27; ಲೂಕ 18:18-27)
16ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, <<ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?>> ಎಂದು ಕೇಳಿದನು.17ಆತನು ಅವನಿಗೆ, <<ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ>> ಎಂದು ಹೇಳಿದನು.18ಅದಕ್ಕೆ ಅವನು, <<ಅವು ಯಾವುವು?>> ಎಂದು ಕೇಳಲು ಯೇಸು, <<ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.19 ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು.>> ಇವುಗಳೇ ಅಂದನು.20ಆ ಯೌವನಸ್ಥನು ಆತನಿಗೆ, <<ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?>> ಎಂದು ಕೇಳಿದನು.21ಯೇಸು ಅವನಿಗೆ, <<ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು>> ಎಂದು ಹೇಳಿದನು.22ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.23ಆಗ ಯೇಸು ತನ್ನ ಶಿಷ್ಯರಿಗೆ, << ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ>> ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.24<<ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ>> ಅಂದನು.25ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು, <<ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು?>> ಎಂದು ಕೇಳಿದರು.26ಯೇಸು ಅವರನ್ನು ದೃಷ್ಟಿಸಿ ನೋಡಿ <<ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ>> ಅಂದನು.ಪರಿತ್ಯಾಗಕ್ಕೆ ನೂರರಷ್ಟು ಪ್ರತಿಫಲ
(ಮಾರ್ಕ 10:28-31; ಲೂಕ 18:28-30)
27ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.28ಯೇಸು ಅವರಿಗೆ, <<ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.29ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.30ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.
20ದ್ರಾಕ್ಷಾತೋಟದ ಕೂಲಿಯಾಳುಗಳ ಸಾಮ್ಯ
1<<ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.2ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.3ಅವನು ಪುನಃ ಸುಮಾರು ಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು,4ಅವರಿಗೆ, <ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ> ಅಂದನು. ಆಗ ಅವರು ಕೆಲಸಕ್ಕೆ ಹೋದರು.5ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತು ಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.6ಮತ್ತೊಂದು ಸಾರಿ ಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, <ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?> ಎಂದು ಕೇಳಿದನು.7ಅವರು ಅವನಿಗೆ, <ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ> ಎಂದರು, ಆಗ ಅವನು ಅವರಿಗೆ, <ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ> ಅಂದನು.8ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, <ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು> ಎಂದು ಹೇಳಿದನು.9ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.10ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.11ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ,12<ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ> ಅಂದರು.13ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, <ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?14ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ.15ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿ ಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?> ಎಂದು ಹೇಳಿದನು.16ಹೀಗೆ ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು>> ಎಂದು ಹೇಳಿದನು.ಯೇಸು ತನ್ನ ಕಷ್ಟ, ಮರಣ, ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು
(ಮಾರ್ಕ 10:32-34; ಲೂಕ 18:31-35)
17ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ,18<<ನೋಡಿರಿ ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.19ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು>> ಎಂದು ಹೇಳಿದನು.ಯಾಕೋಬ, ಯೋಹಾನರ ತಾಯಿಯ ಬೇಡಿಕೆ
(ಮಾರ್ಕ 10:35-45)
20ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು.21ಆತನು ಆಕೆಯನ್ನು, <<ನಿನ್ನ ಅಪೇಕ್ಷೆ ಏನು?>> ಎಂದು ಕೇಳಲು ಆಕೆ ಆತನಿಗೆ, <<ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು>> ಅಂದಳು.22ಅದಕ್ಕೆ ಯೇಸು ಪ್ರತ್ಯುತ್ತರವಾಗಿ, <<ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?>> ಎಂದು ಕೇಲಳಿದನು. ಅವರು ಆತನಿಗೆ, <<ನಮ್ಮಿಂದ ಆಗುವುದು>> ಅಂದರು.23ಆಗ ಆತನು ಅವರಿಗೆ, <<ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು.>> ಎಂದು ಹೇಳಿದನು.24ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.25ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, <<ಅನ್ಯಜನರ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.26ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.27ನಿಮ್ಮಲ್ಲಿ ಪ್ರಮುಖನಾಗಿರಲು ಬಯಸುವವನು ನಿಮ್ಮ ದಾಸನಾಗಿರಲಿ.28ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು>> ಎಂದು ಹೇಳಿದನು.ಯೇಸು ಇಬ್ಬರು ಕುರುಡರಿಗೆ ದೃಷ್ಟಿ ಕೊಟ್ಟದ್ದು
(ಮಾರ್ಕ 10:46-52; ಲೂಕ 18:35-43)
29ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು.30ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, <<ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು>> ಎಂದು ಕೂಗಿಕೊಂಡರು.31ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, <<ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು>> ಎಂದು ಗಟ್ಟಿಯಾಗಿ ಕೂಗಿಕೊಂಡರು.32ಆಗ ಯೇಸು ನಿಂತು ಅವರನ್ನು ಕರೆದು, <<ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ?>> ಎಂದು ಕೇಳಿದನು.33ಅವರು, <<ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು>> ಅಂದರು.34ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.
21ಯೇಸು ಅರಸನಂತೆ ಯೆರೂಸಲೇಮಿನಲ್ಲಿ ಪ್ರವೇಶಿಸಿದ್ದು
(ಮಾರ್ಕ 11:1-11; ಲೂಕ 10:29-40; ಯೋಹಾ. 12:12-19)
1ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ2ಆತನು ಇಬ್ಬರು ಶಿಷ್ಯರನ್ನು ಕರೆದು, <<ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರೊಂದಿಗೆ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತಿರಕ್ಕೆ ತನ್ನಿರಿ.3ಯಾವನಾದರೂ ನಿಮಗೆ ಏನಾದರೂ ಹೇಳಿದರೆ, <ಇವು ನಮ್ಮ ಕರ್ತನಿಗೆ ಬೇಕಾಗಿವೆ> ಎಂದು ನೀವು ಹೇಳಿರಿ; ಅವನು ಕೂಡಲೆ ಅವುಗಳನ್ನು ಬಿಟ್ಟು ಕೊಡುವನು>> ಎಂದು ಹೇಳಿ ಕಳುಹಿಸಿದನು.4ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದಾಯಿತು; ಅದೇನೆಂದರೆ,5 <<ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು>> ಹೇಳಿರಿ ಎಂಬುದು.6ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.7ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಯೇಸು ಹತ್ತಿ ಕುಳಿತುಕೊಂಡನು.8ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.9ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, <<ದಾವೀದನ ಕುಮಾರನಿಗೆ ಹೊಸನ್ನ!
ಕರ್ತನ ಹೆಸರಿನಲ್ಲಿ ಬರುವವನು ಧನ್ಯನು!
ಮೇಲಣ ಲೋಕಗಳಲ್ಲಿ ಹೊಸನ್ನ!>> ಎಂದು ಆರ್ಭಟಿಸಿದರು.
10ಯೇಸು ಯೆರೂಸಲೇಮನ್ನು ಪ್ರವೇಶಿಸಲು ಪಟ್ಟಣದಲ್ಲೆಲ್ಲಾ ಗದ್ದಲವಾಗಿ, <<ಈತನು ಯಾರು?>> ಅಂದರು.11ಅದಕ್ಕೆ ಆ ಗುಂಪಿನ ಜನರು, <<ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು>> ಅಂದರು.ಯೇಸು ದೇವಾಲಯದಲ್ಲಿದ್ದ ವ್ಯಾಪಾರಸ್ಥರನ್ನು ಹೊರಡಿಸಿದ್ದು; ಆತನ ಮಾತಿಗೆ ಅಂಜೂರದ ಮರವು ಒಣಗಿಹೋದದ್ದು
(ಮಾರ್ಕ 11:11-24; ಲೂಕ 19:45-48)
12ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.13ಆತನು ಅವರಿಗೆ, << <ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ> ಎಂದು ಬರೆದಿದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ>> ಎಂದು ಹೇಳಿದನು.14ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.15ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು <<ದಾವೀದನ ಕುಮಾರನಿಗೆ ಹೊಸನ್ನ>> ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.16ಆತನಿಗೆ, <<ಇವರು ಹೇಳುವುದನ್ನು ಕೇಳುತ್ತಿರುವೆಯಾ>> ಎಂದು ಹೇಳಲು ಯೇಸು, <<ಹೌದು, ಕೇಳುತ್ತಿದ್ದೇನೆ, ಆದರೆ <ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಪಡಿಸಿರುವಿ> ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?>> ಎಂದು ಕೇಳಿದನು.17ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು.18ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು.19ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, <<ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ>> ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.20ಶಿಷ್ಯರು ಅದನ್ನು ನೋಡಿ ಬೆರಗಾಗಿ, <<ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ>> ಎಂದು ಆಚಾರ್ಯಗೊಂಡರು.21ಅದಕ್ಕೆ ಯೇಸು, <<ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, <ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು> ಎಂದು ಹೇಳಿದರೆ ಅದೂ ಆಗುವುದು.22ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ>> ಅಂದನು.ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ಪ್ರಶ್ನೇ ಮಾಡಿದ್ದು
(ಮಾರ್ಕ 11:27-12:12; ಲೂಕ 20:1-19; 14:16-24)
23ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, <<ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?>> ಎಂದು ಕೇಳಿದರು.24ಯೇಸು ಅವರಿಗೆ ಹೇಳಿದ್ದೇನೆಂದರೆ, <<ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.25ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?>> ಅಂದನು. ಆಗ ಅವರು, << <ಪರಲೋಕದಿಂದ ಬಂದಿತೆಂದು> ನಾವು ಹೇಳಿದರೆ, <ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ> ಎಂದು ನಮಗೆ ಕೇಳಿಯಾನು;26<ಮನುಷ್ಯರಿಂದ ಬಂದಿತೆಂದು> ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ>> ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.27ಅನಂತರ ಅವರು, <<ನಾವರಿಯೆವು>> ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, <<ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.28ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, <ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು> ಎಂದು ಹೇಳಲು29ಅವನು ಪ್ರತ್ಯುತ್ತರವಾಗಿ, <ನಾನು ಹೋಗುವುದಿಲ್ಲವೆಂದು> ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು.30ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, <ನಾನು ಹೋಗುತ್ತೇನಪ್ಪಾ> ಎಂದು ಹೇಳಿದರೂ ಅವನು ಹೋಗಲೇ ಇಲ್ಲ.31ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, <ಮೊಲನೆಯವನೇ> >> ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.32ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.33<<ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.34ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,35ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.36ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು.37ಕಡೆಯಲ್ಲಿ <ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು> ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.38ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, <ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವಾಸ್ತ್ಯವನ್ನು ನಾವೇ ತೆಗೆದುಕೊಳ್ಳೋಣ> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು39ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು.40ಹಾಗಾದರೆ ದ್ರಾಕ್ಷಾತೋಟದ ಧಣಿಯು ಬಂದಾಗ ಆ ತೋಟಗಾರರಿಗೆ ಏನು ಮಾಡುವನು?>> ಅಂದನು.41ಅವರು ಆತನಿಗೆ, <<ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು>> ಎಂದು ಹೇಳಿದರು.42ಯೇಸು ಅವರಿಗೆ, << <ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?>43ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.44 ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು>> ಎಂದು ಹೇಳಿದನು.45ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;46ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.
22ಮದುವೆ ಔತಣದ ಸಾಮ್ಯ
1ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನೆಂದರೆ,2<<ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.3ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.4ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, <ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ> ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.5ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;6ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.7ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.8ಆಗ ತನ್ನ ಆಳುಗಳಿಗೆ, <ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ.9ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ> ಎಂದು ಹೇಳಿದನು.10ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಜನರಿಂದ ತುಂಬಿಹೋಯಿತು.11ಆ ಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,12ಅವನಿಗೆ <ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?> ಎಂದು ಕೇಳಲು ಅವನು ಮೌನವಾಗಿದ್ದನು.13ಆಗ ಅರಸನು ಸೇವಕರಿಗೆ, <ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.>14ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಿಕೊಳ್ಳಲ್ಪಟ್ಟವರು ಸ್ವಲ್ಪ ಜನ>> ಅಂದನು.ಸುಂಕದ ವಿಷಯದಲ್ಲಿ ಪ್ರಶ್ನೆಮಾಡಿದ್ದು
(ಮಾರ್ಕ 12:13-37; ಲೂಕ 20:20-44)
15ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು16ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, <<ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.17ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು>> ಅಂದರು.18ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, <<ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?19ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ>> ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು.20ಆತನು, <<ಈ ಸ್ವರೂಪವು ಈ ಮುದ್ರೆಯೂ ಯಾರದು?>> ಎಂದು ಕೇಳಿದ್ದಕ್ಕೆ21ಅವರು, <<ಕೈಸರನದು>> ಅಂದರು. ಆಗ ಆತನು ಅವರಿಗೆ, <<ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ>> ಎಂದು ಹೇಳಿದನು.22ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.ಪುನರುತ್ಥಾನದ ವಿಷಯವನ್ನು ಪ್ರಶ್ನಿಸಿದ್ದು
23ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.24ಇವರು ಆತನಿಗೆ, <<ಬೋಧಕನೇ, <ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.>25ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು;26ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು.27ಅವರೆಲ್ಲರು ಸತ್ತ ಮೇಲೆ ಆ ಹೆಂಗಸೂ ಸತ್ತಳು.28ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ>> ಎಂದು ಪ್ರಶ್ನಿಸಿದರು.29ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, <<ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;30ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ.31ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,32 <ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು> ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ>> ಎಂದು ಹೇಳಿದನು.33ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು.ಮುಖ್ಯವಾದ ಆಜ್ಞೆ
34ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.35ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು,36<<ಗುರುವೇ, ಧರ್ಮನಿಯಮದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು>> ಎಂದು ಆತನನ್ನು ಕೇಳಿದ್ದಕ್ಕೆ37ಯೇಸು ಅವನಿಗೆ, << <ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು>38ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು.39ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, <ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು> ಎಂಬುದೇ.40ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ>> ಎಂದು ಹೇಳಿದನು.ದಾವೀದನ ಮಗನು ಎಂಬ ವಿಷಯವಾಗಿ ಪ್ರಶ್ನೆ ಮಾಡಿದ್ದು
41ಫರಿಸಾಯರು ಕೂಡಿಬಂದಿರಲಾಗಿ ಯೇಸು ಅವರಿಗೆ,42<<ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?>> ಎಂದು ಕೇಳಿದ್ದಕ್ಕೆ43ಅವರು ಆತನಿಗೆ, <<ದಾವೀದನ ಮಗನು>> ಎಂದು ಹೇಳಿದರು. ಅದಕ್ಕೆ ಆತನು, <<ಹಾಗಾದರೆ, ದಾವೀದನೇ, ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?
44 << <ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನುನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು> ಎಂದು
ಕರ್ತನು ನನ್ನ ಒಡೆಯನಿಗೆ ನುಡಿದನು.
45ಈ ಮಾತಿನಲ್ಲಿ ದಾವೀದನೇ ಆತನನ್ನು <ಕರ್ತನೆಂದು> ಕರೆದಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?>> ಅಂದನು.46ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.
23ಯೇಸು ಶಾಸ್ತ್ರಿಗಳನ್ನೂ ಫರಿಸಾಯರನ್ನೂ ಗದರಿಸಿದ್ದು; ಯೆರೂಸಲೇಮಿನ ವಿಷಯದಲ್ಲಿ ದುಃಖಪಟ್ಟದ್ದು
(ಮಾರ್ಕ 12:38-40; ಲೂಕ 20:45-47)
1ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ,2<<ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ;3ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.4 ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು.5ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.6ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು;7ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ <ಗುರುಗಳೆನ್ನಿಸಿಕೊಳ್ಳುವುದು,> ಇವುಗಳೇ ಅವರಿಗೆ ಇಷ್ಟ.8ಆದರೆ ನೀವು <ಬೋಧಕರೆನ್ನಿಸಿಕೊಳ್ಳಬೇಡಿರಿ;> ಏಕೆಂದರೆ ಕ್ರಿಸ್ತ ನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.9ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ10ಮತ್ತು <ಗುರುವೆಂದು> ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು11ಆದರೆ ನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು.12ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.13<<ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.14ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ.15<<ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.16<<ಅಯ್ಯೋ, ಕುರುಡು ಮಾರ್ಗದರ್ಶಿಗಳೇ, <ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು> ಎಂದು ಹೇಳುತ್ತೀರಿ.17ಕುರುಡರ್ರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?18ಮತ್ತು <ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು> ಎಂದು ಹೇಳುತ್ತೀರಿ.19ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ?20ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.21ಮತ್ತು ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.22ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.23ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದಿನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮನಿಯಮದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.24ಕುರುಡ ಮಾರ್ಗದರ್ಶಿಗಳೇ, ನೀವು ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು.25<<ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.26ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.27<<ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.28ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.29ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,30<ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ> ಅನ್ನುತ್ತೀರಿ.31ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.32ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.33ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?34ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.35 ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.36ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.37<<ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.38ನೋಡಿರಿ, ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ.39ಈಗಿಂದ, <ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ> >> ಅಂದನು.
24ಯೆರೂಸಲೇಮಿನ ನಾಶನವನ್ನೂ, ಯುಗದ ಸಮಾಪ್ತಿಯನ್ನೂ ಕುರಿತು ಯೇಸು ಮುಂತಿಳಿಸಿದ್ದು
(ಮಾರ್ಕ 13:1-31; ಲೂಕ 21:5-33)
1ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು.2ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, <<ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ>> ಅಂದನು.3ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, <<ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?>> ನಮಗೆ ಹೇಳು ಅನ್ನಲು4ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, <<ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.5ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, <ನಾನು ಕ್ರಿಸ್ತನು> ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.6ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.7ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;8ಇವೆಲ್ಲಾ (ನೂತನ ಕಾಲವು ಹುಟ್ಟುವ) ಪ್ರಸವವೇದನೆಯ ಪ್ರಾರಂಭ.9<<ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.10ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.11ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.12ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು.13ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.14ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.15<<ಪ್ರವಾದಿಯಾದ ದಾನಿಯೇಲನು ಹೇಳಿದಹಾಗೆ ವಿನಾಶಕಾರಕ ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)16ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ;17ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ,18ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ.19ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ.20ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ.21ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.22ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬನಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.23ಆಗ ಯಾರಾದರು ನಿಮಗೆ, <ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ> ಎಂದು ಹೇಳಿದರೆ ನಂಬಬೇಡಿರಿ.24ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.25ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.26ಆದಕಾರಣ ಯಾರಾದರು ನಿಮಗೆ, <ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು> ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; <ಇಗೋ ಒಳಕೋಣೆಗಳಲ್ಲಿದ್ದಾನೆಂದು> ಹೇಳಿದರೆ ನಂಬಬೇಡಿರಿ.27ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು.28 ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.29<<ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.30ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.31ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.ಅಂಜೂರ ಮರದ ದೃಷ್ಟಾಂತ
32<<ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.33ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.34ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.35 ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.ಮನುಷ್ಯಕುಮಾರನು ಬರುವ ಸಮಯ ತಿಳಿಯದ ಕಾರಣ ಎಚ್ಚರವಾಗಿರಬೇಕೆಂದು ಯೇಸು ಬೋಧಿಸಿದ್ದು
(ಮಾರ್ಕ 13:32-37; ಲೂಕ 21:34-36; 19:12-27)
36<<ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,37 ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು.38ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.39ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.40ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಕೈ ಬಿಡಲ್ಪಡುವನು.41ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು.42<<ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.43 ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.44ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.45ಅಂದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?46ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು.47ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.48ಆದರೆ ಆ ದುಷ್ಟ ಆಳು, <ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ> ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು49ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದ್ದಾದರೆ,50ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ51ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.
25ಹತ್ತುಮಂದಿ ಕನ್ಯೆಯರ ಸಾಮ್ಯ
1<<ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.2ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು.3ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.4ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.5ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.6ಆದರೆ ಅರ್ಧರಾತ್ರಿಯಲ್ಲಿ, <ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ> ಎಂಬ ಕೂಗು ಕೇಳಿಸಿತು.7ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು.8ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, <ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.9ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ> ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗಲ್ಲಾ <ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು> ಅಂದರು.10ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.11ಅನಂತರ ಉಳಿದ ಕನ್ನಿಕೆಯರು ಸಹ ಬಂದು, <ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ> ಅಂದರು.12ಆದರೆ ಆತನು ಅವರಿಗೆ ಉತ್ತರವಾಗಿ, <ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ> ಅಂದನು.13 ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.ತಲಾಂತುಗಳ ಸಾಮ್ಯ
14<<ದೇವರ ರಾಜ್ಯವು ಹೇಗೆಂದರೆ ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.15ಅವನು ಒಬ್ಬನಿಗೆ ಐದು ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.16ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.17ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.18ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗಿದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.19ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು20ಐದು ತಲಾಂತು ಹೊಂದಿದವನು ಮುಂದೆಬಂದು ಇನ್ನೂ ಐದು ತಲಾಂತು ತಂದು, <ಯಜಮಾನನೇ, ನೀನು ಐದು ತಲಾಂತನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ> ಅಂದನು.21ಅವನ ಯಜಮಾನನು ಅವನಿಗೆ, <ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು> ಅಂದನು.22ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, <ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ> ಅಂದನು.23ಅವನ ಯಜಮಾನನು ಅವನಿಗೆ, <ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು> ಎಂದು ಹೇಳಿದನು.24ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, <ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು25ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ> ಅಂದನು.26ಆಗ ಅವನ ಯಜಮಾನನು ಅವನಿಗೆ, <ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?27ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ,28ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು.29ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.30ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.>31<< ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;32ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.33ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು.34ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, <ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾಧಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆದುಕೊಳ್ಳಿರಿ.35ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;36ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ> ಎಂದು ಹೇಳುವನು.37ಅದಕ್ಕೆ ಉತ್ತರವಾಗಿ ನೀತಿವಂತರು, <ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು?38ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು?39ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು> ಎಂದು ಕೇಳುವರು.40ಅದಕ್ಕೆ ಉತ್ತರವಾಗಿ ಅರಸನು, <ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ> ಅನ್ನುವನು.41ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, <ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.42ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.43ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು> ಹೇಳುವನು.44ಅದಕ್ಕೆ ಉತ್ತರವಾಗಿ ಅವರೂ ಸಹ, <ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?> ಅನ್ನುವರು.45ಆಗ ಆತನು ಉತ್ತರವಾಗಿ ಅವರಿಗೆ, <ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ> ಅನ್ನುವನು.46ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು>> ಎಂದು ಹೇಳಿದನು.
26ಅಧಿಕಾರಸ್ಥರು ಯೇಸುವನ್ನು ಕೊಲ್ಲಬೇಕೆಂದು ಆಲೋಚಿಸಿದ್ದು
(ಮಾರ್ಕ 14:1-11; ಲೂಕ 22:1-6; ಯೋಹಾ. 12:1-8)
1ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ, <<ಎರಡು ದಿನಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ನೀವು ಬಲ್ಲಿರಿ;2ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು>> ಎಂದು ಹೇಳಿದನು.3ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು4ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು.5<<ಆದರೂ ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು>> ಎಂದು ಮಾತನಾಡಿಕೊಂಡರು.ಸ್ತ್ರೀಯು ಬೆಲೆಯುಳ್ಳ ತೈಲವನ್ನು ಆತನ ಮೇಲೆ ಹೊಯಿದದ್ದು
6ಯೇಸು ಬೆಥಾನ್ಯದಲ್ಲಿ ಸೀಮೋನನೆಂಬ ಕುಷ್ಠರೋಗಿಯ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಒಬ್ಬ ಸ್ತ್ರೀಯು7 ಬಹು ಬೆಲೆಯುಳ್ಳ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆ ತೈಲವನ್ನು ಆತನ ತಲೆಯ ಮೇಲೆ ಸುರಿದಳು.8ಶಿಷ್ಯರು ಇದನ್ನು ಕಂಡು ಕೋಪಗೊಂಡು, <<ಹೀಗೆ ವ್ಯರ್ಥವಾಗಿ ಖರ್ಚುಮಾಡುವುದೇಕೆ?9ಈ ತೈಲವನ್ನು ಬಹಳ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ>> ಅಂದರು.10ಯೇಸು ಅದನ್ನು ತಿಳಿದು ಅವರಿಗೆ, <<ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.11ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.12ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದು ನನ್ನ ಉತ್ತರಕ್ರಿಯೆಗಾಗಿಯೇ.13ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ>> ಹೇಳುವರು.ಇಸ್ಕರಿಯೋತನು ಯೇಸುವನು ಹಿಡಿದುಕೊಡಲು ಒಪ್ಪಿಕೊಂಡದ್ದು
14ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರು ಬಳಿಗೆ ಹೋಗಿ,15<<ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?>> ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.16ಅಂದಿನಿಂದ ಅವನು ಆತನನ್ನು ಹಿಡಿದುಕೊಡುವುದಕ್ಕಾಗಿ ಸಂದರ್ಭ ಹುಡುಕುತ್ತಿದ್ದನು.ಯೇಸು ತನ್ನ ಶಿಷ್ಯರ ಸಂಗಡ ಕಡೆ ಭೋಜನ ಮಾಡಿದ್ದು
(ಮಾರ್ಕ 14:12-31; ಲೂಕ 22:7-34; ಯೋಹಾ. 13:21-26)
17ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, <<ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ>> ಎಂದು ಕೇಲಿದರು.18ಆತನು, <<ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, <ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ> ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ>> ಅಂದನು.19ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿ ಪಸ್ಕದ ಭೋಜನವನ್ನು ತಯಾರಿಸಿದರು.20ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡನು.21ಅವರು ಊಟಮಾಡುತ್ತಿರುವಾಗ ಆತನು, <<ನಿಮಗೆ ಸತ್ಯವಾಗಿ ಹೇಳುತ್ತೇನೆ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು>> ಅಂದನು.22ಆಗ ಅವರು ಬಹಳ ದುಃಖಪಟ್ಟು, <<ಕರ್ತನೇ, ನಾನಲ್ಲವಲ್ಲಾ?>> ಎಂದು ಪ್ರತಿಯೊಬ್ಬರು ಕೇಳತೊಡಗಿದರು.23ಅದಕ್ಕೆ ಪ್ರತ್ಯುತ್ತರವಾಗಿ ಯೇಸು, <<ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು.24ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನಿಗೆ ಆಯ್ಯೋ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು>> ಅಂದನು.25ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, <<ಗುರುವೇ, ನಾನೋ?>> ಎಂದು ಕೇಳಲು ಯೇಸು ಅವನಿಗೆ, <<ನೀನೇ ಹಾಗೆ ಹೇಳಿದ್ದೀ>> ಎಂದು ಹೇಳಿದನು.26ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, <<ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ>> ಅಂದನು.27ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, <<ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ,28ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.29ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ>> ಅಂದನು.30ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.31ಆಗ ಯೇಸು, ಅವರಿಗೆ, <<ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.>>32ಆದರೆ ನಾನು ಜೀವಿತನಾಗಿ ಎದ್ದ ಮೇಲೆ ನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು ಎಂದು ಹೇಳಿದನು.33ಆದರೆ ಪೇತ್ರನು ಆತನಿಗೆ, <<ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ>> ಎಂದು ಉತ್ತರ ಕೊಟ್ಟನು.34ಯೇಸು ಪೇತ್ರನಿಗೆ, <<ನಿನಗೆ ಸತ್ಯವಾಗಿ ಹೇಳುತ್ತೇನೆ, ಇದೇ ರಾತ್ರಿಯಲ್ಲಿ ಕೋಳಿ ಕೂಗುವುದಕ್ಕಿಂತ ಮೊದಲೇ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವಿ>> ಅಂದನು.35ಪೇತ್ರನು ಆತನಿಗೆ, <<ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ>> ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.ಯೇಸು ಗೆತ್ಸೇಮನೆ ತೋಟದಲ್ಲಿ ಪ್ರಾರ್ಥಿಸಿದ್ದು
(ಮಾರ್ಕ 14:32-50; ಲೂಕ 22:40-53; ಯೋಹಾ. 18:1-12)
36ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, <<ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ>> ಎಂದು ಹೇಳಿ,37ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರದುಕೊಂಡು ಮುಂದಕ್ಕೆ ಹೋಗಿ ದುಃಖಪಟ್ಟು ಮನಗುಂದಿದವನಾದನು.38ಮತ್ತು ಅವರಿಗೆ, <<ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ>> ಎಂದು ಹೇಳಿದನು.39ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, <<ನನ್ನ ತಂದೆಯೇ, ಸಾಧ್ಯವಾದರೆ ಈ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ>> ಎಂದು ದೇವರನ್ನು ಪ್ರಾರ್ಥಿಸಿದನು.40ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, <<ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?41 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ>> ಎಂದು ಹೇಳಿದನು.42ತಿರುಗಿ ಎರಡನೇ ಸಾರಿ ಹೋಗಿ, <<ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ>> ಎಂದು ದೇವರನ್ನು ಪ್ರಾರ್ಥಿಸಿದನು.43ಆತನು ತಿರುಗಿ ಬಂದಾಗಲೂ ಅವರು ನಿದ್ದೆಮಾಡುವುದನ್ನು ಕಂಡನು; ಅವರ ಕಣ್ಣುಗಳು ಭಾರವಾಗಿದ್ದವು.44ಅನಂತರ ಮತ್ತೆ ಅವರನ್ನು ಬಿಟ್ಟು ಹೊರಟುಹೋಗಿ ತಿರುಗಿ ಅದೇ ಮಾತುಗಳನ್ನು ಹೇಳುತ್ತಾ ಮೂರನೆಯ ಸಾರಿಯೂ ಪ್ರಾರ್ಥಿಸಿದನು.45ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, <<ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.46ಏಳಿರಿ, ಹೋಗೋಣ; ನನ್ನನ್ನು ಹಿಡಿದುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ>> ಎಂದು ಹೇಳಿದನು.ಶತ್ರುಗಳು ಯೇಸುವನು ಹಿಡಿದದ್ದು
47ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.48ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, <<ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿಯಿರಿ>> ಎಂದು ಮುನ್ಸೂಚನೆ ನೀಡಿದ್ದನು.49ಕೂಡಲೇ ಅವನು ಯೇಸುವಿನ ಬಳಿಗೆ ಬಂದು, <<ಗುರುವೇ ನಮಸ್ಕಾರ>> ಎಂದು ಹೇಳಿ ಆತನಿಗೆ ಮುದ್ದಿಟ್ಟನು.50ಯೇಸು ಅವನಿಗೆ, <<ಗೆಳೆಯನೇ, ನೀನು ಯಾಕೆ ಬಂದಿರುವೇ>> ಎಂದು ಹೇಳಿದನು. ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.51ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.52ಆಗ ಯೇಸು ಅವನಿಗೆ, <<ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು,53ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?54ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ? ಎಂದು ಹೇಳಿದನು.55ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;56ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು>> ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.ಹಿರೀಸಭೆಯವರು ಯೇಸುವನ್ನು ಮರಣದಂಡನೆಗೆ ತಕ್ಕವನೆಂದು ಪಿಲಾತನ ಬಳಿಗೆ ತೆಗೆದುಕೊಂಡು ಹೋದದ್ದು
(ಮಾರ್ಕ 14:53-72; ಲೂಕ 22:54-71; ಯೋಹಾ. 18:12-27)
57ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು.58ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.59ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.60ಅನಂತರ ಇಬ್ಬರು ಮುಂದೆ ಬಂದು,61<<ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು <ಈ ಮನುಷ್ಯನು ಹೇಳಿದನು> >> ಅಂದರು;62ಆಗ ಮಹಾಯಾಜಕನು ಎದ್ದು ನಿಂತು, <<ನೀನೇನೂ ಉತ್ತರಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಆರೋಪಗಳು ನಿಜವೇನು?>> ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು.63ಮಹಾಯಾಜಕನು ಯೇಸುವಿಗೆ, <<ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು>> ಅಂದನು.64ಯೇಸು ಪ್ರತ್ಯುತ್ತರವಾಗಿ, <<ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ>> ಅಂದನು.65ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, <<ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;66ನಿಮಗೆ ಹೇಗೆ ತೋರುತ್ತದೆ?>> ಅನ್ನಲು, <<ಇವನು ಮರಣದಂಡನೆಗೆ ಯೋಗ್ಯನು>> ಎಂದು ಅವರು ಉತ್ತರಕೊಟ್ಟರು.67ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,68<<ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು>> ಅಂದರು.ಪೇತ್ರನು ಯೇಸುವಿನನ್ನು ಅರಿಯೆನೆಂದು ಹೇಳಿದ್ದು
69ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, <<ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು>> ಅಲ್ಲವೇ ಎನ್ನಲು.70ಅವನು ನಿರಾಕರಿಸಿ, <<ನೀನು ಏನು ಹೇಳುತ್ತಿರುವೆ ನನಗೆ ಗೊತ್ತಿಲ್ಲ>> ಎಂದು ಎಲ್ಲರ ಮುಂದೆ ಹೇಳಿದನು.71ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, <<ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು>> ಎಂದು ಹೇಳಿದಳು.72ಅವನು ತಿರುಗಿ ನಿರಾಕರಿಸಿ ಆಣೆಯಿಟ್ಟು, <<ಆ ಮನುಷ್ಯನನ್ನು ನಾನರಿಯೆನು>> ಎಂದು ಹೇಳಿದನು.73ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, <<ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ>> ಎಂದು ಹೇಳಲು74ಅವನು, <<ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು>> ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.75ಪೇತ್ರನಿಗೆ ಯೇಸು, <<ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸಿ ಹೇಳುವಿ>> ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
271ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,2ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪೋನಥ್ಯ ಪಿಲಾತನಿಗೆ ಒಪ್ಪಿಸಿದರು.ಯೂದನು ಪಶ್ಚಾತ್ತಾಪಪಟ್ಟು ಆತ್ಮಹತ್ಯೆ ಮಾಡಿಕೊಂಡದ್ದು
3ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.4<<ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ>> ಅಂದನು. ಅದಕ್ಕವರು, <<ಅದು ನಮಗೇನು? ನೀನೇ ನೋಡಿಕೋ>> ಅಂದರು.5ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.6ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು <<ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು>> ಎಂದರು.7ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು.8ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ <<ಜೀವಹತ್ಯದ ಹೊಲವೆಂಬ>> ಹೆಸರು ಇದೆ.9ಅದೇನಂದರೆ, <<ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ10ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.>> ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು.ಪಿಲಾತನು ಯೇಸುವನ್ನು ಮರಣದಂಡನೆಗೆ ಒಪ್ಪಿಸಿದ್ದು
(ಮಾರ್ಕ 15:2-15; ಲೂಕ 23:2,3,13-25; ಯೋಹಾ. 18:29-40; 19:16)
11ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, <<ನೀನು ಯೆಹೂದ್ಯರ ಅರಸನೋ?>> ಎಂದು ಕೇಳಿದನು. ಯೇಸು, <<ನೀನೇ ಹೇಳಿದ್ದೀ>> ಅಂದನು.12ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ,13ನಂತರ ಪಿಲಾತನು ಆತನನ್ನು, <<ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?>> ಎಂದು ಕೇಳಿದನು.14ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು.15ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು.16ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು.17ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, <<ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?>> ಎಂದು ಅವರನ್ನು ಕೇಳಿದನು.18ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.19ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, <<ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು>> ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.20ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.21ಅದಕ್ಕೆ ದೇಶಾಧಿಪತಿಯು ಅವರನ್ನು, <<ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?>> ಎಂದು ಕೇಳಲು ಅವರು <<ಬರಬ್ಬನನ್ನು>> ಅಂದರು.22ಪಿಲಾತನು ಅವರನ್ನು, <<ಹಾಗಾದರೆ ಕ್ರಿಸ್ತನೆನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?>> ಎಂದು ಕೇಳಲು ಎಲ್ಲರೂ, <<ಅವನನ್ನು ಶಿಲುಬೆಗೆ ಹಾಕಿಸು>> ಅಂದರು.23ಅದಕ್ಕವನು <<ಏಕೆ? ಈತನು ಮಾಡಿದ ಅಪರಾಧವೇನು?>> ಅಂದನು. ಆದರೆ ಅವರು, <<ಅವನನ್ನು ಶಿಲುಬೆಗೆ ಹಾಕಿಸು>> ಎಂದು ಬಹಳವಾಗಿ ಆರ್ಭಟಿಸಿದರು.24ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, <<ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ>> ಎನ್ನಲು25ಜನರೆಲ್ಲಾ, << ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ>> ಅಂದರು.26ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.ಯೇಸುವನ್ನು ಅಪಹಾಸ್ಯ ಮಾಡಿ ಶಿಲುಬೆಗೆ ಹಾಕಿದ್ದು
(ಮಾರ್ಕ 15:16-41; ಲೂಕ 23:26,33-49; ಯೋಹಾ. 19:2-3,16-30)
27ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು,28ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ,29ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, <<ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ>> ಎಂದು ಆತನನ್ನು ಪರಿಹಾಸ್ಯಮಾಡಿ30ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.31ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.ಗೊಲ್ಗೊಥಾಕ್ಕೆ ಪ್ರಯಾಣ
32ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.33ಅವರೆಲ್ಲರೂ ಗೊಲ್ಗೊಥಾ ಅಂದರೆ <<ಕಪಾಲಸ್ಥಳ>> ಎಂಬ ಸ್ಥಾನಕ್ಕೆ ಬಂದಾಗ34 ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.35ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;36ಮತ್ತು ಅಲ್ಲಿ ಕುಳಿತುಕೊಂಡು ಆತನನ್ನು ಕಾಯುತ್ತಾ ಇದ್ದರು.37ಇದಲ್ಲದೆ ಆತನ ಮೇಲೆ ಹೊರಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನಂದರೆ, <<ಈತನು ಯೇಸು, ಯೆಹೂದ್ಯರ ಅರಸನು>> ಎಂಬುದೇ.38ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.39ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ,40<<ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ>> ಎಂದು ಆತನನ್ನು ಹಂಗಿಸುತ್ತಿದ್ದರು.41ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, <<ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.42ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.43ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; <ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ> >> ಎಂದು ಅಣಕಿಸಿ ಮಾತನಾಡುತ್ತಿದ್ದರು.44ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.ಯೇಸುವಿನ ಮರಣ
45 ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.46ಸುಮಾರು ಮೂರು ಘಂಟೆಗೆ ಯೇಸು, <<ಏಲೀ, ಏಲೀ, ಲಮಾ ಸಬಕ್ತಾನೀ>> ಎಂದು ಮಹಾ ಧ್ವನಿಯಿಂದ ಕೂಗಿದನು. ಅಂದರೆ, <<ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ.>>47ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, <<ಇವನು ಎಲೀಯನನ್ನು ಕರೆಯುತ್ತಿದ್ದಾನೆ>> ಅಂದನು.48ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು.49ಮಿಕ್ಕಾದವರು, <<ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ>> ಅಂದರು .50ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.51ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;52ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;53ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.54ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, <<ನಿಜವಾಗಿ ಈತನು ದೇವಕುಮಾರನಾಗಿದ್ದನು>> ಅಂದರು.55ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು.56ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು.ಶಿಷ್ಯರು ಯೇಸುವಿನ ದೇಹವನ್ನು ಸಮಾಧಿಯಲ್ಲಿ ಇರಿಸಿದ್ದು
(ಮಾರ್ಕ 15:42-47; ಲೂಕ 23:50-56; ಯೋಹಾ. 19:38-42)
57ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು.58ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲು ಪಿಲಾತನು ಅದನ್ನು ಆತನಿಗೆ ಕೊಡಬೇಕೆಂದು ಅಪ್ಪಣೆಮಾಡಿದನು.59ಯೋಸೇಫನು ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ60ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.61ಮಗ್ದಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು.62ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು,63<<ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ <ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ> ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;64ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ>> ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.65ಪಿಲಾತನು ಅವರಿಗೆ, <<ಕಾವಲುಗಾರರನ್ನು ಕರೆದುಕೊಂಡು ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ>> ಎಂದು ಹೇಳಲು66ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.
28ಯೇಸುವಿನ ಪುನರುತ್ಥಾನ
(ಮಾರ್ಕ 16:1-10; ಲೂಕ 24:1-10; ಯೋಹಾ. 20:1-18)
1ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು.2ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.3ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು;4ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು.5ಆಗ ದೂತನು ಆ ಹೆಂಗಸರಿಗೆ, <<ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;6ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ;7ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, <ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ> ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,>> ಎಂದು ಹೇಳಿದನು.8ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು.9ಆಗ ಯೇಸು ಅವರನ್ನು ಭೇಟಿಯಾಗಿ, <<ನಿಮಗೆ ಶುಭವಾಗಲಿ>> ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.10ಆಗ ಯೇಸು ಅವರಿಗೆ, <<ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು>> ಎಂದು ಹೇಳಿದನು.ಕಾವಲು ಗಾರನ ಸುದ್ಧಿ
11ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು.12ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು,13<< <ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು> ಎಂದು ಹೇಳಿರಿ;14ಈ ಸುದ್ದಿಯು ಶತಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ>> ಎಂದರು.15ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.ಯೇಸುವಿನ ಕಡೆಯ ಅಪ್ಪಣೆ
16ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು.17ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.18ಯೇಸು ಅವರ ಹತ್ತಿರಕ್ಕೆ ಬಂದು, <<ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.19 ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.20ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ>> ಎಂದು ಹೇಳಿದನು.
ಮಾರ್ಕನು ಬರೆದ ಸುವಾರ್ತೆ
1ಸ್ನಾನಿಕನಾದ ಯೋಹಾನನು
(ಮತ್ತಾ. 3:1-12; ಲೂಕ 3:1-18; ಯೋಹಾ. 1:19-28)
1 ದೇವಕುಮಾರನಾದ ಯೇಸು ಕ್ರಿಸ್ತನನ್ನು ಕುರಿತಾದ ಸುವಾರ್ತೆಯ ಪ್ರಾರಂಭವು.2 ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ,<<ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ;
ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.>>
3 << <ಕರ್ತನ ದಾರಿಯನ್ನು ಸಿದ್ಧಮಾಡಿರಿ;ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ>
ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ>> ಎಂಬುದೇ.
4 ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.5ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.6ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.7ಅವನು <<ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.8ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ>> ಎಂದು ಸಾರಿ ಹೇಳಿದನು.ಯೇಸುವಿನ ದೀಕ್ಷಾಸ್ನಾನ
(ಮತ್ತಾ. 3:13-4:17; ಲೂಕ 3:21, 22; 4:1-15; ಯೋಹಾ. 1:31-33)
9ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು.10ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.11ಆಗ <<ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ>> ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.12ಕೂಡಲೇ ಪವಿತ್ರಾತ್ಮ ಪ್ರೇರಿತನಾಗಿ ಯೇಸು ಅಡವಿಗೆ ಹೋದನು. 13ಆತನು ನಲವತ್ತು ದಿವಸ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.14 ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,15 <<ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.>>ಯೇಸು ಪ್ರಥಮ ಶಿಷ್ಯರನ್ನು ಕರೆದದ್ದು
(ಮತ್ತಾ. 4:18-22; ಲೂಕ 5:1-11)
16ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.17ಯೇಸು ಅವರಿಗೆ, <<ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು>> ಎಂದು ಹೇಳಿದನು.18ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.19ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.20ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.ಯೇಸು ದೆವ್ವವನ್ನು ಬಿಡಿಸಿದ್ದು
(ಮತ್ತಾ. 8:14-16; ಲೂಕ 4:31-41)
21ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.22ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.23ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.24ಆ ದೆವ್ವವು, <<ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು>> ಎಂದು ಕೂಗಿ ಹೇಳಿತು.25ಯೇಸು ಅದನ್ನು ಗದರಿಸಿ, <<ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ>> ಎಂದನು.26ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು.27ಜನರೆಲ್ಲರೂ ಬೆರಗಾಗಿ, <<ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!>> ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.28ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.ರೋಗಿಗಳನ್ನು ಸ್ವಸ್ಥಮಾಡಿದ್ದು
29 ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.30ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.31ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.32ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.33ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು.34ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.ಯೇಸುವಿನ ಏಕಾಂತ ಪ್ರಾರ್ಥನೆ
(ಲೂಕ 4:42-44)
35ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.36ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು,37ಆತನನ್ನು ಕಂಡಾಗ <<ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ>> ಎಂದರು.38ಆತನು ಅವರಿಗೆ, <<ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ>> ಎಂದು ಹೇಳಿದನು.39ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.ಯೇಸು ಕುಷ್ಠರೋಗಿಯನ್ನು ಸ್ವಸ್ಥಮಾಡಿದ್ದು
(ಮತ್ತಾ. 8:2-4; ಲೂಕ 5:12-16)
40ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, <<ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ>> ಎಂದು ಬೇಡಿಕೊಂಡನು.41ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, <<ನನಗೆ ಮನಸ್ಸುಂಟು; ಶುದ್ಧನಾಗು>> ಅಂದನು.42ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು.43ಆಗ ಯೇಸು ಅವನಿಗೆ, <<ಯಾರಿಗೂ ಏನೂ ಹೇಳಬೇಡ ನೋಡು;44ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ>> ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.45ಆದರೆ ಅವನು ಹೊರಟುಹೋಗಿ ಎಲ್ಲಾಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.
2ಯೇಸು ಒಬ್ಬ ಪಾರ್ಶ್ವವಾಯ ಪಾಪವನ್ನು ಕ್ಷಮಿಸಿ ಅವನ ರೋಗವನ್ನು ಸ್ವಸ್ಥಪಡಿಸಿದ್ದಕ್ಕೆ ಶಾಸ್ತ್ರಿಗಳ ಆಕ್ಷೇಪ
(ಮತ್ತಾ. 9:1-8; ಲೂಕ 5:17-26)
1ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು.2ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.3ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು.4ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.5ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, <<ಮಗನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ>> ಎಂದು ಹೇಳಿದನು.6ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು;7<<ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?>> ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು.8ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, <<ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?9ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ <ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ> ಅಥವಾ <ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ> ಅನ್ನುವುದೋ?10ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು>> ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ11 <<ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ>> ಅಂದನು.12ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, <<ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ>> ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.ಯೇಸು ಲೇವಿಯನ್ನು ಕರೆದದ್ದು
(ಮತ್ತಾ. 9:9-13; ಲೂಕ 5:27-32)
13ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು.14ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, <<ನನ್ನನ್ನು ಹಿಂಬಾಲಿಸು>> ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.15ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು.16ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, <<ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?>> ಎಂದು ಕೇಳಿದರು.17ಯೇಸು ಅದನ್ನು ಕೇಳಿ ಅವರಿಗೆ, <<ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು>> ಅಂದನು.ಉಪವಾಸದ ಕುರಿತಾದ ಪ್ರಶ್ನೆ
(ಮತ್ತಾ. 9:14-17; ಲೂಕ 5:33-38)
18ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? <<ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?>> ಎಂದು ಕೇಳಿದರು.19ಅದಕ್ಕೆ ಯೇಸು ಅವರಿಗೆ, <<ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು.20ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು.21<<ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.22ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು>> ಎಂದು ಹೇಳಿದನು.ಮನುಷ್ಯಕುಮಾರನು ಸಬ್ಬತ್ ದಿನದ ಒಡೆಯನು
(ಮತ್ತಾ. 12:1-14; ಲೂಕ 6:1-11)
23ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು.24ಫರಿಸಾಯರು ಆತನನ್ನು, <<ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?>> ಎಂದು ಕೇಳಿದರು.25ಆಗ ಯೇಸು ಅವರಿಗೆ, <<ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ?26 ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?>> ಎಂದು ನುಡಿಯುತ್ತಾ,27 <<ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ.28ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ>> ಎಂದು ಯೇಸು ಹೇಳಿದನು.
3ಯೇಸು ಕೈ ಬತ್ತಿಹೋದ ಮನುಷ್ಯನನ್ನು ಸ್ವಸ್ಥಪಡಿಸಿದ್ದು
1ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು.2ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು.3ಆತನು ಕೈಬತ್ತಿದ್ದವನಿಗೆ, <<ಎದ್ದು ನಡುವೆ ನಿಂತುಕೋ>> ಎಂದು ಹೇಳಿದನು.4ಆಗ ಅವರಿಗೆ, <<ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?>> ಎಂದು ಹೇಳಲು ಅವರು ಸುಮ್ಮನಿದ್ದರು.5ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, <<ನಿನ್ನ ಕೈ ಚಾಚು>> ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.6ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.ಜನಪ್ರಿಯ ಯೇಸುವನ್ನು ಅನೇಕರು ಹಿಂಬಾಲಿಸಿದ್ದು
(ಮತ್ತಾ. 10:1-4; ಲೂಕ 6:12-19)
7ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.8ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.9ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.10ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.11 ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು <<ನೀನು ದೇವಕುಮಾರನು>> ಎಂದು ಕೂಗುತ್ತಿದ್ದವು.12ಆದರೆ ಆತನು ತಾನು ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು.ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ನೇಮಿಸಿದ್ದು
13ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.14ಆತನು ಹನ್ನೆರಡು ಮಂದಿಯನ್ನು [ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು] ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ,15ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು.16ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.17ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು.18ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,19ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.ಯೇಸುವು ಮತ್ತು ಬೆಲ್ಜೆಬೂಲನು
(ಮತ್ತಾ. 12:22-32,46-50; ಲೂಕ 11:14-22; 8:19-21)
20ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.21ಇದನ್ನು ಕೇಳಿ ಆತನ ಬಂಧುಗಳು <<ಅವನಿಗೆ ಹುಚ್ಚುಹಿಡಿದಿದೆ>> ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.22ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, <<ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ>> ಹೇಳುತ್ತಿದ್ದರು.23ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, <<ಸೈತಾನನು ಸೈತಾನನನ್ನು ಬಿಡಿಸುವುದುಂಟೇ?24ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು;25ಹಾಗೆಯೇ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ಉಳಿಯದು.26ಅದರಂತೆ ಸೈತಾನನು ತನಗೆ ವಿರೋಧವಾಗಿ ಎದ್ದು ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನು ಉಳಿಯದೆ ನಾಶವಾಗಿ ಹೋಗುವನು.27ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.28ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.29ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು>> ಎಂದು ಹೇಳಿದನು.30ಅವರು <<ಈತನಲ್ಲಿ ಅಶುದ್ಧಾತ್ಮವಿದೆ>> ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು.ಯೇಸುವಿನ ತಾಯಿ ಹಾಗೂ ಸಹೋದರರು
31ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.32ಆ ಜನರು ಆತನಿಗೆ, <<ನಿನ್ನ ತಾಯಿಯೂ, ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು>> ಎಂದು ಹೇಳಿದರು.33ಅದಕ್ಕೆ ಆತನು ಅವರಿಗೆ, <<ನನಗೆ ತಾಯಿಯೂ, ತಮ್ಮಂದಿರೂ ಯಾರು?>> ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ,34<<ಇಗೋ, ನನ್ನ ತಾಯಿ, ನನ್ನ ತಮ್ಮಂದಿರು.35ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ>> ಅಂದನು.
4ದೇವರ ರಾಜ್ಯಹೊಂದುವ ಬಗೆಗಿನ ಸಾಮ್ಯಗಳು
ಬಿತ್ತುವವನ ಸಾಮ್ಯ
(ಮತ್ತಾ. 13:1-34; ಲೂಕ 8:4-18; 13:18,19)
1ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.2ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ:3<<ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು.4ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.5ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ಆಳವಾಗಿಲ್ಲದ್ದರಿಂದ ಅವು ಬೇಗ ಮೊಳೆತವು;6ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು.7ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.8ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.>>9ಮತ್ತು ಆತನು <<ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಅಂದನು.10ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು.11ಆತನು ಅವರಿಗೆ, <<ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.
12ಅದ್ದರಿಂದ, <<ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ,
ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ,
ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.>>
13ಅನಂತರ ಆತನು ಅವರಿಗೆ ಹೇಳಿದ್ದೇನಂದರೆ, <<ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ?14ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ.15ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.16ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ;17ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.18ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು;19ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ.20ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು>> ಅಂದನು.ದೀಪಸ್ತಂಭದ ಸಾಮ್ಯ
21ಇದಲ್ಲದೆ ಯೇಸು ಅವರಿಗೆ, <<ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ?22ಮರೆಯಾಗಿರುವಂಥ ಎಲ್ಲವೂ ಬೆಳಕಿಗೆ ಬಾರದೇ ಇರುವುದಿಲ್ಲ; ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ.23 ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಎಂದು ಹೇಳಿದನು.24ಮತ್ತು ಆತನು ಅವರಿಗೆ; <<ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.25 ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದುದನ್ನೂ ತೆಗೆಯಲ್ಪಡುವುದು>> ಎಂದು ಹೇಳಿದನು.ಬೆಳೆಯುವ ಬೀಜದ ಸಾಮ್ಯ
26ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; <<ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ27ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜದಿಂದ ಸಸಿ ಮೊಳೆತು ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ.28ಭೂಮಿಯು ಮೊದಲು ಮೊಳಕೆಯನ್ನೂ, ಆ ಮೇಲೆ ತೆನೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ.29ಆದರೆ ಫಲಮಾಗಿದಾಗ ಸುಗ್ಗಿಕಾಲ ಬಂದಿತೆಂದು ವ್ಯವಸಾಯಗಾರನು ಅದನ್ನು ಕೊಯ್ಯಲು ಕುಡುಗೋಲನ್ನು ಬಳಸುತ್ತಾನೆ>> ಅಂದನು.ಸಾಸಿವೆಕಾಳಿನ ಸಾಮ್ಯ
30ಇನ್ನೂ ಆತನು ಹೇಳಿದ್ದು; <<ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?31ಅದು ಸಾಸಿವೆಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.32ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ>> ಅಂದನು.33ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.34ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು.ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ನಿಲ್ಲಿಸಿದ್ದು
(ಮತ್ತಾ. 8:23-27; ಲೂಕ 8:22-25)
35ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, <<ಆಚೇದಡಕ್ಕೆ ಹೋಗೋಣ>> ಎಂದು ಹೇಳಿದನು.36ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು.37ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು.38ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, <<ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ>> ಎಂದು ಕೇಳಿದರು.39ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ <<ಶಾಂತವಾಗಿರು, ಮೊರೆಯಬೇಡ>> ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.40ತರುವಾಯ ಆತನು ಅವರನ್ನು, <<ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?>> ಎಂದು ಕೇಳಲು41ಅವರು ಬಹು ಭಯಪಟ್ಟು, <<ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
5ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟವನನ್ನು ಬಿಡಿಸಿದ್ದು
(ಮತ್ತಾ. 8:28-34; ಲೂಕ 8:26-39)
1ಆ ಮೇಲೆ ಅವರು ಸಮುದ್ರದ ಆಚೇದಡದಲ್ಲಿದ್ದ ಗೆರಸೇನರ ಸೀಮೆಗೆ ತಲುಪಿದರು.2ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.3-4ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ.5ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು.6ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು,7ಮಹಾಶಬ್ದದಿಂದ ಆರ್ಭಟಿಸಿ, <<ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ>> ಎಂದು ಹೇಳಿದನು.8ಏಕೆಂದರೆ ಯೇಸು, <<ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು>> ಎಂದು ಆಜ್ಞಾಪಿಸಿದ್ದನು.9ಯೇಸು, <<ನಿನ್ನ ಹೆಸರು ಏನೆಂದು>> ಅವನನ್ನು ಕೇಳಿದ್ದಕ್ಕೆ ಅವನು, <<ನನ್ನ ಹೆಸರು ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ>> ಎಂದು ಹೇಳಿ,10ನಮ್ಮನ್ನು ಈ ಪ್ರಾಂತದಿಂದ ಹೊರಡಿಸಬೇಡ ಎಂದು ಆತನನ್ನು ಬಹಳವಾಗಿ ಬೇಡಿಕೊಂಡವು.11ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು.12ಆ ಅಶುದ್ಧಾತ್ಮಗಳು, <<ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು>> ಎಂದು ಆತನನ್ನು ಬೇಡಿಕೊಂಡವು.13ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.14ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಆ ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು.15ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು.16ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದವನಿಗೆ ಸಂಭವಿಸಿದೆಲ್ಲವನ್ನು ಮತ್ತು ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಿದರು.17ಆಗ ಅವರು ಯೇಸುವಿಗೆ ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.18ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು.19ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, <<ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು>> ಅಂದನು.20 ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು.ಸತ್ತಹುಡುಗಿಯ ಮತ್ತು ರಕ್ತಕುಸುಮ ರೋಗಿಯ ಸ್ವಸ್ಥತೆ
(ಮತ್ತಾ. 9:18-26; ಲೂಕ 8:40-56)
21ಯೇಸು ತಿರುಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.22ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯಿರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು,23<<ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು>> ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.24ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು.25ಆಗ ಅಲ್ಲಿ ಹನ್ನೆರಡು ವರುಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು.26ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.27-28ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, <<ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು>> ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು.29ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.30ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, <<ನನ್ನ ಉಡುಪನ್ನು ಮುಟ್ಟಿದವರು ಯಾರು?>> ಎಂದು ಕೇಳಲು31ಆತನ ಶಿಷ್ಯರು ಆತನಿಗೆ, <<ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ <ನನ್ನನ್ನು ಮುಟ್ಟಿದವರು ಯಾರು> ಎಂದು ಕೇಳುತ್ತೀಯಲ್ಲಾ?>> ಎಂದರು.32ಆದರೆ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ,33ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.34ಆತನು ಆಕೆಗೆ, <<ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ>> ಎಂದು ಹೇಳಿದನು.35ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, <<ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?>> ಅಂದರು.36ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, <<ಅಂಜಬೇಡ, ನಂಬಿಕೆ ಮಾತ್ರ ಇರಲಿ>> ಎಂದು ಹೇಳಿದನು.37ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ.38ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.39ಆತನು ಒಳಕ್ಕೆ ಹೋಗಿ, <<ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ>> ಅನ್ನಲು,40ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ,41ಅವಳ ಕೈಹಿಡಿದು, <<ತಲಿಥಾಕೂಮ್>> ಅಂದನು. ಈ ಮಾತಿಗೆ << ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ>> ಎಂದರ್ಥ.42ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರುಷ ವಯಸ್ಸಿನವಳು.43 ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.
6ಯೇಸುವಿನ ಸ್ವಂತ ಊರಿನವರು ಆತನನ್ನು ತಾತ್ಸಾರಮಾಡಿದ್ದು
(ಮತ್ತಾ. 13:54-58; ಲೂಕ 4:15-30)
1ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.2ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. <<ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ?3ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?>> ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.4ಯೇಸು ಅವರಿಗೆ, <<ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ>> ಎಂದು ಹೇಳಿದನು.5ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ.6ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.ಯೇಸು ಸುವಾರ್ತೆ ಸಾರುವುದಕ್ಕೆ ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕಳುಹಿಸಿದ್ದು
(ಮತ್ತಾ. 9:35 -10:14; ಲೂಕ 9:1-6)
7ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು,8ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ.9ಚಪ್ಪಲಿಗಳನ್ನು ಹಾಕಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ ಎಂದು ಅಪ್ಪಣೆಕೊಟ್ಟನು.10ಇದಲ್ಲದೆ ಆತನು ಅವರಿಗೆ, <<ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ.11ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ>> ಎಂದು ಹೇಳಿದನು.12ಅವರು ಹೊರಟು ಹೋಗಿ ಜನರಿಗೆ, <<ನೀವು ನಿಮ್ಮ ಪಾಪಗಳನ್ನು ಬಿಟ್ಟು ಮಾನಸಾಂತರ ಹೊಂದಬೇಕು>> ಎಂದು ಸಾರಿ ಹೇಳಿದರು.13ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು.ಸ್ನಾನಿಕನಾದ ಯೋಹಾನನ ಶಿರಚ್ಛೇದನ
(ಮತ್ತಾ. 14:1-12; ಲೂಕ 9:7-9; 3:19,20)
14ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, <<ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ>> ಎಂದು ಹೇಳುತ್ತಿದ್ದರು.15ಕೆಲವರು, <<ಇವನು ಎಲೀಯನೆಂತಲೂ>> ಮತ್ತೆ ಕೆಲವರು, <<ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ>> ಹೇಳಿದರು.16ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, <<ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ>> ಎಂದು ಹೇಳಿದನು.17ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು.18ಇದರ ನಿಮಿತ್ತ ಯೋಹಾನನು ಹೆರೋದನಿಗೆ, <<ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ>> ಎಂದು ಹೇಳುತ್ತಿದ್ದನು.19ಇದರಿಂದ ಹೆರೋದ್ಯಳು ಸಹ ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.20ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.21ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,22ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, <<ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ.23ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ>> ಎಂದು ಪ್ರಮಾಣಮಾಡಿದನು.24ಆಗ ಅವಳು ಹೊರಕ್ಕೆ ಹೋಗಿ, <<ನಾನು ಏನು ಕೇಳಿಕೊಳ್ಳಲಿ?>> ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, <<ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ>> ಅಂದಳು.25ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, <<ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ>> ಎಂದು ಕೇಳಿಕೊಂಡಳು.26ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.27ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು;28ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಕಡಿದು ಒಂದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು.29ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿ ಅವರು ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು.ಯೇಸು ಐದುಸಾವಿರ ಜನರಿಗೆ ಊಟಮಾಡಿಸಿದ್ದು
(ಮತ್ತಾ. 14:13-36; ಲೂಕ 9:10-17; ಯೋಹಾ. 6:1-21)
30 ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು.31ಆತನು ಅವರಿಗೆ, <<ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ>> ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ.32ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು.33ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು.34ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.35ಅಷ್ಟರಲ್ಲಿ ಸಂಜೆ ಆಗಿದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು, <<ಇದು ನಿರ್ಜನ ಸ್ಥಳ, ಈಗ ಹೊತ್ತು ಬಹಳವಾಯಿತು;36ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ>> ಎಂದು ಹೇಳಿದರು.37ಅದಕ್ಕೆ ಯೇಸು, <<ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ>> ಎಂದು ಉತ್ತರಕೊಟ್ಟನು. ಅದಕ್ಕವರು, <<ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?>> ಎಂದು ಹೇಳಲು38ಆತನು, <<ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ>> ಅಂದನು. ಅವರು ವಿಚಾರಿಸಿಕೊಂಡು ಬಂದು, <<ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ>> ಅಂದರು.39ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ,40ಜನರು ಪಂಕ್ತಿಗೆ ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕುಳಿತುಕೊಂಡರು.41ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು.42ಅವರೆಲ್ಲರೂ ತೃಪ್ತರಾಗುವವರೆಗೂ ಊಟಮಾಡಿದರು.43ರೊಟ್ಟಿಯ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು.44ಊಟಮಾಡಿದವರು ಐದು ಸಾವಿರ ಮಂದಿ ಗಂಡಸರು.ಯೇಸು ನೀರಿನ ಮೇಲೆ ನಡೆದದ್ದು
45ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.46ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು.47ಸಂಜೆಯಾದಾಗ ದೋಣಿಯು ಸಮುದ್ರದ ನಡುವೆ ಇತ್ತು; ಯೇಸು ಒಬ್ಬನೇ ದಡದಲ್ಲಿದ್ದನು.48ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.49ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಏಕೆಂದರೆ ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು.50ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, <<ಧೈರ್ಯವಾಗಿರಿ, ನಾನೇ, ಹೆದರಬೇಡಿರಿ>> ಎಂದು ಹೇಳಿದನು.51ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಆ ಬಿರುಗಾಳಿಯು ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹು ಆಶ್ಚರ್ಯಪಟ್ಟರು.52 ಏಕೆಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಿರಲಿಲ್ಲ; ಅವರ ಹೃದಯವು ಕಠಿಣವಾಗಿತ್ತು.53ಅವರು ಸಮುದ್ರವನ್ನು ದಾಟಿ ಗೆನೆಜರೇತ್ ದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು.54ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದು,55ಆ ಸೀಮೆಯಲ್ಲೆಲ್ಲಾ ಓಡಾಡಿ ರೋಗಿಯಾಗಿದ್ದವರನ್ನು ಡೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲಿದ್ದಾನೆಂದು ಕೇಳಿದರೋ ಅಲ್ಲಿಗೆ ತೆಗೆದುಕೊಂಡು ಹೋದರು.56ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.
7ಶುದ್ಧ ಹಾಗೂ ಅಶುದ್ಧ
(ಮತ್ತಾ. 15:1-20)
1ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು.2ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.3ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.4ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.5ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, <<ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?>> ಎಂದು ಕೇಳಿದರು.6ಅದಕ್ಕೆ ಆತನು, <<ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: << <ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ,
ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.
7ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದನನಗೆ ಆರಾಧನೆ ಮಾಡುವುದು ವ್ಯರ್ಥ> ಎಂಬುದೇ.
8ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ>> ಎಂದು ಹೇಳಿದನು.9ಆತನು ಇನ್ನೂ ಅವರಿಗೆ, <<ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;10<ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು> ಮತ್ತು <ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ> ಮೋಶೆಯು ಹೇಳಿದ್ದಾನೆ.11ನೀವಾದರೋ <ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ> ಎಂದು ಹೇಳುವುದಾದರೆ12ಅವನು ತನ್ನ ತಂದೆಗಾಗಲಿ, ತಾಯಿಗಾಗಲಿ ಇನ್ನೇನೂ ಸಹಾಯ ಮಾಡಬೇಕಾಗಿಲ್ಲ ಎಂದು ಹೇಳುತ್ತೀರಿ.13ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ>> ಎಂದು ಹೇಳಿದನು.14ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, <<ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.15ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ>> ಎಂದು ಹೇಳಿದನು.16<< ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ>> ಅಂದನು.17ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು18ಆತನು ಅವರಿಗೆ, <<ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,19ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?>> ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.20ಆತನು ಮತ್ತೆ ಹೇಳಿದ್ದೇನೆಂದರೆ, <<ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ;21ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,22ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.23ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ>> ಎಂದನು.ಯೇಸು ಅನ್ಯಮತಸ್ಥಳ ಮಗಳನ್ನೂ ಸ್ವಸ್ಥಮಾಡಿದ್ದು
(ಮತ್ತಾ. 15:21-28)
24ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.25ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು.26ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,27ಆತನು ಆಕೆಗೆ, <<ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ>> ಎಂದು ಹೇಳಿದನು.28ಆದರೆ ಅದಕ್ಕೆ ಆಕೆಯು, <<ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ>> ಎಂದು ಉತ್ತರಕೊಡಲು29ಆತನು, <<ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು>> ಅಂದನು.30ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.ಒಬ್ಬ ಮೂಕನನ್ನೂ ಸ್ವಸ್ಥಪಡಿಸಿದ್ದು
31ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.32ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.33ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ,34ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, <<ಎಪ್ಫಥಾ>> ಎಂದು ಹೇಳಿದನು. ಆ ಶಬ್ದಕ್ಕೆ <<ತೆರೆಯಲಿ>> ಎಂದರ್ಥ.35ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು.36ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು.37 ಅವರು ಅತ್ಯಂತ ಆಶ್ಚರ್ಯಪಟ್ಟು, <<ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ>> ಎಂದು ಅಂದುಕೊಂಡರು.
8ಯೇಸು ನಾಲ್ಕುಸಾವಿರ ಜನರಿಗೆ ಊಟಮಾಡಿಸಿದ್ದು
(ಮತ್ತಾ. 15:32-39)
1ಆ ದಿವಸಗಳಲ್ಲಿ ಜನರು ಪುನಃ ದೊಡ್ಡಗುಂಪಾಗಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು,2<<ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ.3ಇವರನ್ನು ಬರೀ ಹೊಟ್ಟೆಯಲ್ಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ>> ಎಂದು ಅವರಿಗೆ ಹೇಳಿದನು.4ಅದಕ್ಕೆ ಶಿಷ್ಯರು, <<ಈ ಅಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದು ಈ ಜನರನ್ನು ತೃಪ್ತಿಪಡಿಸುವುದಕ್ಕಾದೀತು?>> ಅಂದರು.5ಆತನು, <<ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?>> ಎಂದು ಅವರನ್ನು ಕೇಳಿದ್ದಕ್ಕೆ ಅವರು, <<ಏಳು ರೊಟ್ಟಿಗಳು ಇವೆ>> ಅಂದರು.6ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.7ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಆತನು ಅವುಗಳಿಗಾಗಿ ದೇವರಿಗೆ ಸ್ತೋತ್ರಮಾಡಿ, ಇವುಗಳನ್ನೂ ಹಂಚಿಕೊಡಿರಿ ಎಂದು ಶಿಷ್ಯರಿಗೆ ಅಪ್ಪಣೆ ಕೊಟ್ಟನು.8ಜನರು ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು.9ಊಟಮಾಡಿದವರು ಹೆಚ್ಚುಕಡಿಮೆ ನಾಲ್ಕು ಸಾವಿರ ಗಂಡಸರಿದ್ದರು.10ಆತನು ಅವರನ್ನು ಕಳುಹಿಸಿದ ನಂತರ ಕೂಡಲೆ ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಸೀಮೆಗೆ ಬಂದನು.ಯೇಸು ಯೆಹೂದ್ಯ ಮತಾಭಿಮಾನಿಗಳ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು
(ಮತ್ತಾ. 16:1-12; ಲೂಕ 11:16; 12:1; ಯೋಹಾ. 6:30)
11ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, <<ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು>> ಎಂದು ಕೇಳಿದರು.12ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, <<ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ>> ಎಂದು ಹೇಳಿದನು.13ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು.14ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ.15ಯೇಸು ಅವರಿಗೆ, <<ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ>> ಎಂದು ಎಚ್ಚರಿಸಿದನು.16ಅವರು, <<ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು>> ಎಂದು ತಮ್ಮೊಳಗೆ ಚರ್ಚಿಸಿಕೊಂಡರು.17ಆತನು ಅದನ್ನು ತಿಳಿದು, <<ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?18ಕಣ್ಣಿದ್ದು ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ?19ನಾನು ಆ ಐದು ರೊಟ್ಟಿಗಳನ್ನು ಮುರಿದು ಐದುಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?>> ಎಂದು ಕೇಳಿದನು. ಅವರು, <<ಹನ್ನೆರಡು ಬುಟ್ಟಿಗಳು>> ಅಂದರು.20<<ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ>> ಎಂದು ಕೇಳಿದನು. ಅವರು, <<ಏಳು ಪುಟ್ಟಿಗಳು>> ಅಂದರು.21ಆಗ ಆತನು ಅವರಿಗೆ, <<ನೀವು ಇನ್ನೂ ಗ್ರಹಿಸಲಿಲ್ಲವೋ?>> ಎಂದು ಕೇಳಿದನು.ಯೇಸು ಕುರುಡನಿಗೆ ಕಣ್ಣುಕೊಟ್ಟದ್ದು
22ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.23 ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, <<ನಿನಗೆ ಏನಾದರೂ ಕಾಣುತ್ತದೆಯೋ?>> ಎಂದು ಅವನನ್ನು ಕೇಳಿದನು.24ಅವನು ತಲೆಯೆತ್ತಿ ನೋಡಿ, <<ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ>> ಎಂದನು.25ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.26ತರುವಾಯ ಆತನು, <<ನೀನು ಊರೊಳಗೆ ಹೋಗಬೇಡ>> ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು.ಪೇತ್ರನು ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡದ್ದು
(ಮತ್ತಾ. 16:13-28; ಲೂಕ 9:18-27)
27ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು, <<ಜನರು ನನ್ನನ್ನು ಯಾರೆಂದು ಹೇಳುತ್ತಾರೆ?>> ಎಂದು ತನ್ನ ಶಿಷ್ಯರನ್ನು ಕೇಳಿದನು.28ಅದಕ್ಕೆ ಅವರು, <<ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ>> ಎಂದು ಹೇಳಿದರು.29ಆತನು ಅವರನ್ನು, ಕುರಿತು <<ನೀವು ನನ್ನನ್ನು ಯಾರನ್ನುತ್ತೀರಿ?>> ಎಂದು ಕೇಳಲಾಗಿ ಪೇತ್ರನು, <<ನೀನು ಕ್ರಿಸ್ತನು>> ಎಂದು ಉತ್ತರಕೊಟ್ಟನು.30ಅದಕ್ಕೆ ಆತನು, ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದನು.ಯೇಸು ತನ್ನ ಮರಣವನ್ನೂ ಶಿಷ್ಯರಿಗೆ ಮುಂಚಿತವಾಗಿ ತಿಳಿಸಿದ್ದು
31ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.32ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ <<ನೀನು ಹೀಗೆ ಹೇಳುವುದು ಸರಿಯಲ್ಲ>> ಎಂದು ಪ್ರತಿಭಟಿಸಿದನು.33ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, <<ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ>> ಎಂದು ಹೇಳಿದನು.34ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, <<ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.35ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.36ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?37ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು?38ವ್ಯಭಿಚಾರಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆ ಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆ ಪಡುವನು>> ಎಂದನು.
91ಯೇಸು ಅವರಿಗೆ, <<ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ>> ಎಂದು ಹೇಳಿದನು.ಯೇಸುವಿನ ರೂಪಾಂತರ
(ಮತ್ತಾ. 17:1-13; ಲೂಕ 9:28-36)
2ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.3ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು.4ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು.5ಆಗ ಪೇತ್ರನು ಯೇಸುವಿಗೆ, <<ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು>> ಎಂದು ಹೇಳಿದನು.6ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು.7 ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, <<ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ>> ಎಂದು ಧ್ವನಿ ಉಂಟಾಯಿತು.8ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.9ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, <<ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ>> ಎಂದು ಆಜ್ಞಾಪಿಸಿದನು.10ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು <<ಸತ್ತು ಜೀವಿತನಾಗಿ ಏಳುವುದೆಂದರೇನು>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.11ಇದಲ್ಲದೆ ಅವರು, <<ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?>> ಎಂದು ಆತನನ್ನು ಕೇಳಿದರು.12ಅದಕ್ಕೆ ಯೇಸು ಅವರಿಗೆ, <<ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?13ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು>> ಅಂದನು.ಯೇಸು ಮೂಗದೆವ್ವ ಹಿಡಿದವನನ್ನು ಗುಣಪಡಿಸಿದ್ದು
(ಮತ್ತಾ. 17:14-21; ಲೂಕ 9:3-42)
14ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.15ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.16ಆತನು ಅವರಿಗೆ, <<ಇವರ ಸಂಗಡ ಏನು ವಾದಮಾಡುತ್ತೀರಿ?>> ಎಂದು ಕೇಳಿದನು.17ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, <<ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.18ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು>> ಎಂದು ಉತ್ತರ ಕೊಟ್ಟನು.19ಅದಕ್ಕಾತನು, <<ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ>> ಅಂದನು.20ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.21ಯೇಸು ಅವನ ತಂದೆಯನ್ನು, <<ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?>> ಎಂದು ಕೇಳಿದಾಗ ಅವನು, <<ಚಿಕ್ಕಂದಿನಲ್ಲಿಯೇ ಬಂದಿದೆ;22ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು>> ಅಂದನು.23ಯೇಸು ಅವನಿಗೆ, << <ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ>? ನಂಬುವವನಿಗೆ ಎಲ್ಲವೂ ಸಾಧ್ಯ!>> ಎಂದು ಹೇಳಿದನು.24ಕೂಡಲೆ ಆ ಹುಡುಗನ ತಂದೆಯು, <<ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು>> ಎಂದು ಕೂಗಿ ಹೇಳಿದನು.25ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, <<ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ>> ಅಂದನು.26ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, <<ಸತ್ತುಹೋದನು>> ಎಂದು ಅಂದುಕೊಂಡರು.27ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು.28ಯೇಸು ಮನೆಗೆ ಬಂದಾಗ ಆತನ ಶಿಷ್ಯರು, <<ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು>> ಆತನನ್ನು ಏಕಾಂತದಲ್ಲಿ ಕೇಳಿದರು.29ಅದಕ್ಕೆ ಆತನು, <<ಈ ಬಗೆಯ ದೆವ್ವಗಳು ದೇವರ ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು>> ಅವರಿಗೆ ಹೇಳಿದನು.ಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂದಾಗಿ ತಿಳಿಸಿದ್ದು
(ಮತ್ತಾ. 17:22-23; ಲೂಕ 9:43-45)
30ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು.31 ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, <<ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು>> ಹೇಳಿದನು.32ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.ಯೇಸು ತನ್ನ ಶಿಷ್ಯರಿಗೆ ದೀನಭಾವ ಬಳಸಿಕೊಳ್ಳಬೇಕೆಂದು ತಿಳಿಸಿದ್ದು
(ಮತ್ತಾ. 18:1-9; ಲೂಕ 9:46-50)
33ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, <<ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?>> ಎಂದು ಶಿಷ್ಯರನ್ನು ಕೇಳಿದನು.34ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.35ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, <<ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು>> ಎಂದು ಹೇಳಿ,36ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ,37<<ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು>> ಎಂದು ಹೇಳಿದನು.ನಮಗೆ ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ
38ಯೋಹಾನನು ಆತನಿಗೆ, <<ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು>> ಎಂದು ಹೇಳಿದನು.39ಅದಕ್ಕೆ ಯೇಸು, <<ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.40ನಮಗೆ ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ.41ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ>> ಹೇಳುತ್ತೇನೆ.ಪಾಪಕ್ಕೆ ಪ್ರೇರಣೆ
42ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.43-44ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.45-46ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.47ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ.48ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ.49<<ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು.50ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪ ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.>>
10ವಿವಾಹ ವಿಚ್ಛೇದನ
(ಮತ್ತಾ. 19:1-9; ಲೂಕ 16:18)
1ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.2ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, <<ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ>> ಎಂದು ಕೇಳಿದರು.3ಅದಕ್ಕೆ ಆತನು <<ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?>> ಎಂದನು.4ಅದಕ್ಕೆ ಅವರು, <<ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು>> ಅಂದರು.5ಆದರೆ ಯೇಸು ಅವರಿಗೆ, <<ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು.6ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು.7 ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.8ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ.9ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು>> ಎಂದು ಹೇಳಿದನು.10ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು.11ಅದಕ್ಕೆ ಆತನು, <<ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ;12ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ>> ಎಂದು ಹೇಳಿದನು.ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು
(ಮತ್ತಾ. 19:13-15; ಲೂಕ 18:15-17)
13ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು.14ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, <<ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.15ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ>> ಎಂದು ಹೇಳಿದನು.16ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.ಐಶ್ವರ್ಯವಂತನಾದ ಯೌವನಸ್ಥ ಮತ್ತು ಅವನಿಗಿದ್ದ ಹಣದ ಮೋಹ
(ಮತ್ತಾ. 19:16-30; ಲೂಕ 18:18-30)
17ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, <<ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು>> ಆತನನ್ನು ಕೇಳಿದನು.18ಯೇಸು ಅವನಿಗೆ, <<ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ.19 ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ>> ಎಂದು ಹೇಳಿದನು.20ಅವನು ಆತನಿಗೆ, <<ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ>> ಎಂದು ಹೇಳಲು,21ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, <<ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು>> ಎಂದು ಹೇಳಿದನು.22ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು.23ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, <<ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ>> ಎಂದು ಹೇಳಿದನು.24ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, <<ಮಕ್ಕಳೇ, ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.25ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ>> ಎಂದು ಹೇಳಿದನು.26ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, <<ಹಾಗಾದರೆ ಯಾರಿಗೆ ರಕ್ಷಣೆಯಾದೀತು>> ಎಂದು ತಮ್ಮತಮ್ಮೊಳಗೆ ಅಂದುಕೊಂಡರು.27ಯೇಸು ಅವರನ್ನು ದೃಷ್ಟಿಸಿ ನೋಡಿ <<ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ>> ಅಂದನು.28ಪೇತ್ರನು ಆತನಿಗೆ, <<ಇಗೋ ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ>> ಎಂದು ಹೇಳುವುದಕ್ಕೆ ಪ್ರಾರಂಭಿಸಿದನು.29ಅದಕ್ಕೆ ಯೇಸು, <<ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ,30ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.31ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು>> ಎಂದು ಹೇಳಿದನು.ಯೇಸು ತನ್ನ ಮರಣ ಪುನರುತ್ಥಾನವನ್ನು ಮೂರನೆಯ ಸಾರಿ ಮುಂದಾಗಿ ತಿಳಿಸಿದ್ದು
(ಮತ್ತಾ. 20:17-19; ಲೂಕ 18:31-34)
32ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು;33ಅವರಿಗೆ, <<ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.34ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು>> ಎಂದು ಹೇಳಿದನು.ಜೆಬೆದಾಯನ ಮಕ್ಕಳ ಬಿನ್ನಹ
(ಮತ್ತಾ. 20:20-28)
35ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಆತನ ಬಳಿಗೆ ಬಂದು ಆತನಿಗೆ, <<ಗುರುವೇ, ನಾವು ಬೇಡಿಕೊಳ್ಳುವುದನ್ನು ನಮಗೋಸ್ಕರ ಮಾಡಬೇಕೆಂದು>> ಹೇಳಿದರು.36ಅದಕ್ಕೆ ಆತನು ಅವರಿಗೆ, <<ನಾನು ನಿಮಗೇನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?>> ಎಂದು ಕೇಳಲು,37ಅವರು ಆತನಿಗೆ, <<ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು>> ಅಂದರು.38ಆದರೆ ಯೇಸು ಅವರಿಗೆ, <<ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ? ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?>> ಎಂದು ಕೇಳಲು ಅವರು <<ನಮ್ಮಿಂದಾಗುವುದು>> ಅಂದರು.39ಆಗ ಯೇಸು ಅವರಿಗೆ, <<ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು.40ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು>> ಎಂದು ಹೇಳಿದನು.41ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು.42ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, <<ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ.43ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು.44ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಬೇಕು.45ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು>> ಎಂದು ಹೇಳಿದನು.ಯೇಸು ಹಾಗೂ ಬಾರ್ತಿಮಾಯನೆಂಬ ಕುರುಡ
(ಮತ್ತಾ. 20:29-34; ಲೂಕ 18:35-43)
46ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.47ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವುದು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, <<ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು>> ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು.48ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, <<ದಾವೀದನ ಕುಮಾರನೇ ನನ್ನನ್ನು ಕರುಣಿಸು>> ಎಂದು ಮತ್ತಷ್ಟು ಕೂಗಿಕೊಂಡನು.49ಆಗ ಯೇಸು ನಿಂತು, <<ಅವನನ್ನು ಕರೆಯಿರಿ>> ಅನ್ನಲು ಅವರು ಆ ಕುರುಡನನ್ನು ಕರೆದು, <<ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ>> ಅಂದರು.50ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.51ಯೇಸು ಅವನನ್ನು, <<ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ>> ಎಂದು ಕೇಳಲು ಆ ಕುರುಡನು, <<ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು>> ಅಂದನು.52ಯೇಸು ಅವನಿಗೆ, <<ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ>> ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.
11ಯೇಸು ಅರಸನಂತೆ ಯೆರೂಸಲೇಮಿನಲ್ಲಿ ಪ್ರವೇಶಿಸಿದ್ದು
(ಮತ್ತಾ. 21:1-9; ಲೂಕ 19:29-38; ಯೋಹಾ. 12:12-16)
1ಅವರು ಯೆರೂಸಲೇಮಿಗೆ ಸಮೀಪಿಸಿ ಬೆತ್ಫಗೆ ಹಾಗೂ ಬೇಥಾನ್ಯದ ಬಳಿಯಲ್ಲಿರುವ ಎಣ್ಣೆಮರಗಳ ಗುಡ್ಡಕ್ಕೆ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು,2<<ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೂ ಅದರ ಮೇಲೆ ಯಾರೂ ಸವಾರಿ ಮಾಡಿಲ್ಲ; ಅದನ್ನು ಬಿಚ್ಚಿ ಇಲ್ಲಿಗೆ ತನ್ನಿರಿ.3ಯಾರಾದರೂ ನಿಮ್ಮನ್ನು, <ಅದನ್ನೇಕೆ ಬಿಚ್ಚುತ್ತೀರಿ?> ಎಂದು ಕೇಳಿದರೆ, <ಇದು ಕರ್ತನಿಗೆ ಅಗತ್ಯವಾಗಿದೆ> ಅನ್ನಿರಿ, ಅವರು ಬೇಗನೆ ಅದನ್ನು ಕಳುಹಿಸಿಕೊಡುವರು>> ಎಂದು ಹೇಳಿ ಕಳುಹಿಸಿದನು.4ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಕತ್ತೆಮರಿಯನ್ನು ಕಟ್ಟಿರುವುದನ್ನು ಕಂಡು ಅದನ್ನು ಬಿಚ್ಚಿದರು.5ಅಲ್ಲಿ ನಿಂತಿದ್ದವರಲ್ಲಿ ಕೆಲವರು, <<ಈ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?>> ಎಂದು ಅವರನ್ನು ಕೇಳಿದರು.6ಅದಕ್ಕೆ ಯೇಸು ಹೇಳಿದಂತೆಯೇ ಅವರು ಹೇಳಿದರು ಆಗ ಜನರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟುಕೊಟ್ಟರು.7ಶಿಷ್ಯರು ಆ ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕುಳಿತುಕೊಂಡನು.8ಆಗ ಅನೇಕರು ತಮ್ಮ ಮೇಲಂಗಿಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಳೆಯ ರೆಂಬೆಗಳನ್ನು ಕಡಿದು, ತಂದು ಹಾಸಿದರು.9ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು:<<ಹೊಸನ್ನ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;
10ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ;ಮೇಲಣ ಲೋಕಗಳಲ್ಲಿ ಹೊಸನ್ನ>> ಎಂದು ಆರ್ಭಟಿಸಿದರು.
11ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು.ಯೇಸು ಅಂಜೂರದ ಮರವನ್ನು ಶಪಿಸಿದ್ದು
(ಮತ್ತಾ. 21:12-22; ಲೂಕ 19:45-48)
12ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನಿಗೆ ಹಸಿವಾಯಿತು.13ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.14ಆಗ ಯೇಸು ಆ ಮರಕ್ಕೆ, <<ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ>> ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು.ದೇವಾಲಯದ ಶುದ್ಧೀಕರಣ
15 ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು;16ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯದೊಳಕ್ಕೆ ಹಾದು ಹೋಗಗೊಡಿಸಲಿಲ್ಲ.17ಮತ್ತು ಆತನು ಉಪದೇಶಮಾಡಿ, << <ನನ್ನ ಆಲಯವು ಎಲ್ಲಾ ಜನಾಂಗಗಳಿಗೂ
ಪ್ರಾರ್ಥನಾಲಯವೆನಿಸಿಕೊಳ್ಳುವುದು>
ಎಂದು ಬರೆದಿದೆಯಲ್ಲಾ? ಆದರೆ
<ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ> >> ಎಂದು ಹೇಳಿದನು.18ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.19ಸಂಜೆಯಾದಾಗ ಯೇಸುವೂ, ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು.ನಿಸ್ಸಂದೇಹವಾದ ನಂಬಿಕೆ
20ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.21ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, <<ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ>> ಎಂದು ಹೇಳಿದ್ದಕ್ಕೆ22ಯೇಸು ಹೇಳಿದ್ದೇನಂದರೆ, <<ನಿಮಗೆ ದೇವರಲ್ಲಿ ನಂಬಿಕೆಯಿರಲಿ.23ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, <ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!> ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.24ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.25ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು>> ಅಂದನು.26 ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.ಯೇಸುವಿನ ಅಧಿಕಾರವನ್ನು ಪ್ರಶ್ನಿಸಿದ್ದು
(ಮತ್ತಾ. 21:23-46; ಲೂಕ 20:1-19)
27ಅವರು ಪುನಃ ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯದ ಆವರಣದಲ್ಲಿ ನಡೆದಾಡುತ್ತಿರಲಾಗಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ ಆತನ ಬಳಿಗೆ ಬಂದು,28<<ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?>> ಎಂದು ಆತನನ್ನು ಕೇಳಿದರು.29ಯೇಸು ಅವರಿಗೆ, <<ನಾನೂ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.30ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?>> ಉತ್ತರಕೊಡಿರಿ ಅಂದನು.31ಆಗ ಅವರು, << <ಪರಲೋಕದಿಂದ ಬಂದಿತೆಂದು> ನಾವು ಹೇಳಿದರೆ, <ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ> ಅಂದಾನು;32<ಮನುಷ್ಯರಿಂದ ಬಂದಿತು> >> ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.33ಹೀಗಿರಲಾಗಿ ಅವರು, <<ನಮಗೆ ಗೊತ್ತಿಲ್ಲ>> ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, <<ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ>> ಅಂದನು.
12ದ್ರಾಕ್ಷಿಯ ತೋಟದ ಸಾಮ್ಯ
1ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, <<ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷೆಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷೆಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.2ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು.3ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು.4ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು.5ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು.6ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.7ಆದರೆ ಆ ಗುತ್ತಿಗೆದಾರರು, <ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು> ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು,8ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷಿಯ ತೋಟದಿಂದ ಹೊರಗೆ ಬಿಸಾಡಿದರು.9ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.
10<< < ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇಮುಖ್ಯವಾದ ಮೂಲೆಗಲ್ಲಾಯಿತು.
11ಇದು ಕರ್ತನಿಂದಲೇ ಆಯಿತು,ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರುತ್ತದೆ ಎಂಬ ಶಾಸ್ತ್ರವಚನಗಳನ್ನೂ ನೀವು ಓದಲಿಲ್ಲವೇ?> >> ಎಂದನು.
12ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.ಕೈಸರನಿಗೆ ತೆರಿಗೆ ಕೊಡುವ ವಿಷಯ
(ಮತ್ತಾ. 22:15-46; ಲೂಕ 20:20-44)
13ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.14ಇವರು ಬಂದು, <<ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?>> ಎಂದು ಆತನನ್ನು ಕೇಳಿದರು.15ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, <<ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ>> ಎಂದು ಹೇಳಲು ಅವರು ತಂದರು.16ಆಗ ಆತನು ಇದರ <<ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?>> ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು.17ಯೇಸು, <<ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ>> ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು.ಪುನರುತ್ಥಾನದ ಕುರಿತಾದ ಪ್ರಶ್ನೆ
18ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು,19ಆತನನ್ನು ಪ್ರಶ್ನೆಮಾಡಿದ್ದೇನಂದರೆ, <<ಬೋಧಕನೇ, <ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು> ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ.20<<ಒಮ್ಮೆ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು.21ಎರಡನೆಯವನೂ ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. ಅದರಂತೆ ಮೂರನೆಯವನು.22ಇದೇ ಪ್ರಕಾರ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತರು. ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.23ಪುನರುತ್ಥಾನದಲ್ಲಿ ಅವರು ಎದ್ದುಬರುವಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ>> ಎಂದರು.24ಅದಕ್ಕೆ ಯೇಸು, <<ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ?25ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.26ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ <ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?>27ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ>> ಎಂದು ಹೇಳಿದನು.ಮುಖ್ಯವಾದ ಆಜ್ಞೆ
28ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, <<ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?>> ಎಂದು ಆತನನ್ನು ಕೇಳಿದರು.29ಅದಕ್ಕೆ ಯೇಸು, << <ಇಸ್ರಾಯೇಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನು ಒಬ್ಬನೇ ದೇವರು.30ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು> ಎಂಬುದೇ ಮುಖ್ಯವಾದ ಆಜ್ಞೆ.31 <ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು> ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ>> ಎಂದು ಉತ್ತರ ಕೊಟ್ಟನು.32ಆಗ ಆ ಶಾಸ್ತ್ರಿಯು, <<ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು.33ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು>> ಅಂದನು.34ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, <<ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ>> ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.ದಾವೀದಕುಮಾರನ ಕುರಿತಾದ ಪ್ರಶ್ನೆ
35ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, <<ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ? ಎಂದು ಪ್ರಶ್ನಿಸಿದನು.36 << <ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು
ಕರ್ತನು ನನ್ನ ಒಡೆಯನಿಗೆ ನುಡಿದನು> ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ.
37ದಾವೀದನೇ ಆತನನ್ನು <ಕರ್ತನೆಂದು> ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?>> ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.ಯೇಸು ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆ ಹೇಳಿದ್ದು
(ಮತ್ತಾ. 23; ಲೂಕ 20:45-47)
38ಆತನು ಉಪದೇಶಮಾಡಿ ಹೇಳಿದ್ದೇನಂದರೆ, <<ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ,39ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ.40ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು>> ಎಂದನು.ವಿಧವೆಯ ಕಾಣಿಕೆ ಹಾಗು ದೇವರಿಗೆ ಪ್ರಿಯವಾದ ಕಾಣಿಕೆಯ ಬಗ್ಗೆ
(ಲೂಕ 21:1-4)
41ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.42ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು.43ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, <<ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.44ಹೇಗಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ>> ಎಂದನು.
13ಯುಗದ ಸಮಾಪ್ತಿಯ ಗುರುತುಗಳು
(ಮತ್ತಾ. 24; ಲೂಕ 21:5-36)
1ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, <<ಗುರುವೇ, ನೋಡು, ಎಂಥಾ ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!>> ಎಂದು ಹೇಳಿದನು.2ಯೇಸು, <<ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು>> ಎಂದನು.3ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,4ಇವರು ಪ್ರತ್ಯೇಕವಾಗಿ ಆತನಿಗೆ, <<ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು>> ಎಂದು ಆತನನ್ನು ಕೇಳಿದರು.5ಯೇಸು ಅವರಿಗೆ ಹೇಳಿದ್ದೇನಂದರೆ, <<ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.6ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು, <ನಾನೇ ಕ್ರಿಸ್ತನು> ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.7ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳ ಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.8ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ (ನೂತನಕಾಲ ಹುಟ್ಟುವ ಗುರುತು).9<<ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,10ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.11ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,12ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು,13ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.>>14<<ಇದಲ್ಲದೆ ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.15ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.16ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ.17ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ!18ಆ ದಿವಸಗಳು ಸಂಕಟದ ದಿವಸಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ.19ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.20ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.21ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ.22ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.23ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ>> ಹೇಳಿದ್ದೇನೆ.24ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; << <ಸೂರ್ಯನು ಕತ್ತಲಾಗಿ ಹೋಗುವನು.
25ಚಂದ್ರನು ತನ್ನ ಬೆಳಕು ಕೊಡದೆ ಇರುವನು.ನಕ್ಷತ್ರಗಳು ಆಕಾಶದಿಂದ ಬೀಳುವವು.
ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.>
26ಆಗ ಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.27ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.>>ಅಂಜೂರ ಮರದ ಪಾಠ
28<<ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ.29ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ.30ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.31ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.>>ಆ ದಿನವೂ ಗಳಿಗೆಯೂ ಯಾರಿಗೂ ತಿಳಿಯದು
32<<ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.33ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ.34ಅದು ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ.35ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!36ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು.37ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!>> ಎಂದನು.
14ಪರಿಮಳ ತೈಲದಿಂದ ಯೇಸುವನ್ನು ಅಭಿಷೇಕಿಸಿದ್ದು
(ಮತ್ತಾ. 26:1-16; ಲೂಕ 22:1-6; ಯೋಹಾ. 11:47-53; 12:1-8)
1ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.2<<ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು>> ಎಂದು ಮಾತನಾಡಿಕೊಂಡರು.3ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.4ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು, <<ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ?5ಇದನ್ನು ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?>> ಎಂದು ಹೇಳಿ ಆಕೆಯನ್ನು ದೂಷಿಸಿದರು.6ಆದರೆ ಯೇಸು, <<ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.7ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.8ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.9ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ>> ಎಂದನು.10ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.11ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು.ಯೇಸು ತನ್ನ ಶಿಷ್ಯರ ಸಂಗಡ ಕಡೆ ಬೋಜನವನ್ನು ಮಾಡಿದ್ದು
(ಮತ್ತಾ. 26:17-29; ಲೂಕ 22:7-23; ಯೋಹಾ. 13:21-29)
12ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, <<ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು>> ಎಂದು ಕೇಳಿದರು.13ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, <<ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.14ಅವನು ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ, <ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?> ಎಂಬುದಾಗಿ ಕೇಳುತ್ತಿದ್ದಾನೆ, ಎಂದು ಹೇಳಿರಿ.15ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ>> ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು.16ಶಿಷ್ಯರು ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು.17ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.18ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, <<ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ>> ಎಂದನು.19ಆಗ ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ <<ನಾನಲ್ಲವಲ್ಲಾ?>> ಎಂದು ಕೇಳತೊಡಗಿದರು.20ಆತನು ಉತ್ತರವಾಗಿ ಅವರಿಗೆ <<ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ.21ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು>> ಅಂದನು.22ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ <<ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ>> ಎಂದನು.23ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು.24ಯೇಸು ಅವರಿಗೆ, <<ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ.25ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ>> ಎಂದನು.ಯೇಸು ಪೇತ್ರನ ನಿರಾಕರಣೆಯನ್ನು ಮುಂತಿಳಿಸಿದ್ದು
(ಮತ್ತಾ. 26:30-36; ಲೂಕ 22:31-53; ಯೋಹಾ. 13:36-38; 18:1-11)
26ಬಳಿಕ ಅವರು ಒಂದು ಕೀರ್ತನೆ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು.27ಆಗ ಯೇಸು ಅವರಿಗೆ, <<ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ;<< <ನಾನು ಕುರುಬನನ್ನು ಹೊಡೆಯುವೆನು;
ಕುರಿಗಳು ಚದರಿ ಹೋಗುವವು> ಎಂದು ಬರೆದಿದೆಯಲ್ಲಾ ಅಂದನು.
28ಆದರೂ ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು>> ಎಂದು ಹೇಳಿದನು.29ಪೇತ್ರನು ಯೇಸುವಿಗೆ, <<ಎಲ್ಲರೂ ಬಿಟ್ಟುಹೋದರೂ ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ>> ಎಂದು ಹೇಳಿದನು.30ಯೇಸುವು ಆತನಿಗೆ, <<ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ>> ಎಂದನು.31ಆದರೆ ಅವನು, <<ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು>> ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.ಗೆತ್ಸೇಮನೆಯಲ್ಲಿ ಯೇಸುವಿನ ಪ್ರಾರ್ಥನೆ
32ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, <<ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ>> ಎಂದು ಹೇಳಿದನು.33ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು.34ಮತ್ತು ಆತನು ಅವರಿಗೆ <<ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ>> ಎಂದು ಹೇಳಿದನು.35ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು.36<<ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ>> ಎಂದನು.37ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, <<ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?38ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು>> ಎಂದು ಹೇಳಿದನು.39ಆ ಮೇಲೆ ಪುನಃ ಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು.40ಯೇಸು ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು ಯಾಕೆಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ.41ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, <<ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.42ಏಳಿರಿ, ಹೋಗೋಣ. ಇಗೋ, ನನ್ನನ್ನು ಪಾಪಿಗಳ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿದ್ದಾನೆ ನೋಡಿರಿ>> ಎಂದು ಹೇಳಿದನು.ಯೇಸುವಿನ ಬಂಧನ
43ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು.44ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, <<ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ>> ಎಂದು ಮೊದಲೇ ಸೂಚನೆಕೊಟ್ಟಿದ್ದನು.45ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ, <<ಗುರುವೇ>> ಎಂದು ಹೇಳಿ ಆತನಿಗೆ ಮುದ್ದಿಟ್ಟನು.46ಅವರು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.47ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.48ಅವರು ಯೇಸುವನ್ನು ಹಿಡಿದಾಗ ಆತನು ಅವರಿಗೆ, <<ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ?49ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು>> ಎಂದು ಉತ್ತರ ಕೊಟ್ಟನು.50ಆಗ ಆತನ ಸಂಗಡವಿದ್ದವರೆಲ್ಲರು ಆತನನ್ನು ಬಿಟ್ಟು ಓಡಿಹೋದರು.51ಆಗ ಯುವಕನೊಬ್ಬನು ಮೈಮೇಲೆ ನಾರುಮಡಿಯನ್ನು ಮಾತ್ರ ಸುತ್ತಿಕೊಂಡವನಾಗಿ ಯೇಸುವಿನ ಹಿಂದೆ ಬರುತ್ತಿದ್ದನು;52ಅವರು ಅವನನ್ನು ಹಿಡಿಯಲೂ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.ಯೇಸು ಹಿರೀಸಭೆಯವರ ಮುಂದೆ
(ಮತ್ತಾ. 26:57-75; ಲೂಕ 22:54-71; ಯೋಹಾ. 18:12-27)
53ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರೆಲ್ಲರೂ , ಹಿರಿಯರು, ಶಾಸ್ತ್ರಿಗಳು ಕೂಡಿಬಂದರು.54ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.55ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.56ಅನೇಕರು ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.57-58ತರುವಾಯ ಕೆಲವರು ಎದ್ದು ನಿಂತು, << <ಇವನು ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು> ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ>> ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು.59ಹೀಗೆ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.60ಆಗ ಮಹಾಯಾಜಕನು ಅವರ ಮಧ್ಯದಲ್ಲಿ ಎದ್ದು ನಿಂತು, <<ನೀನೇನೂ ಉತ್ತರ ಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು?>> ಎಂದು ಯೇಸುವನ್ನು ಕೇಳಿದನು.61ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, <<ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರ ಕುಮಾರನೋ?>> ಎಂದು ಆತನನ್ನು ಕೇಳಿದನು.62ಯೇಸುವು <<ಹೌದು ನಾನೇ!<<ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ,
ಆಕಾಶದ ಮೇಘಗಳಲ್ಲಿ ಬರುವುದನ್ನೂ
ನೀವು ನೋಡುವಿರಿ>> ಎಂದನು.
63ಇದನ್ನು ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, <<ಇನ್ನೂ ನಮಗೆ ಸಾಕ್ಷಿಗಳ ಅಗತ್ಯವೇನಿದೆ?64ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?>> ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು.65ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ <<ಪ್ರವಾದಿಸು>> ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.ಪೇತ್ರನ ನಿರಾಕರಣೆ
66ಇತ್ತಲಾಗಿ ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅವನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಕಂಡು,67ಅವನನ್ನು ದೃಷ್ಟಿಸಿ ನೋಡಿ, <<ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು>> ಎಂದಳು.68ಆದರೆ ಅವನು ನಿರಾಕರಿಸಿ, <<ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ, ಅರ್ಥವಾಗುತ್ತಲೂ ಇಲ್ಲ!>> ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಹೋದನು.69ಆ ದಾಸಿಯು ಅವನನ್ನು ಪುನಃ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ, <<ಇವನು ಅವರಲ್ಲಿ ಒಬ್ಬನು>> ಎಂದು ಹೇಳಲಾರಂಭಿಸಿದಳು.70ಆಗ ಅವನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಿನ ಮೇಲೆ ಪಕ್ಕದಲ್ಲಿ ನಿಂತವರು ಪೇತ್ರನಿಗೆ, <<ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು, ಯಾಕೆಂದರೆ ನೀನು ಗಲಿಲಾಯದವನೇ>> ಎಂದರು.71ಆದರೆ ಅವನು, <<ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ>> ಎಂದು ಹೇಳಿ ತನ್ನನ್ನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿದಾಗ, ಕೋಳಿ ಎರಡನೆಯ ಸಾರಿ ಕೂಗಿತು.72ಆಗ ಪೇತ್ರನು, <<ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ>> ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಖಃಭರಿತನಾಗಿ ಅತ್ತನು.
15ಪಿಲಾತನ ಮುಂದೆ ಯೇಸುವಿನ ವಿಚಾರಣೆ
(ಮತ್ತಾ. 27:12-26; ಲೂಕ 23:1-25; ಯೋಹಾ. 18:28-19:16)
1ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.2ಪಿಲಾತನು ಆತನನ್ನು, <<ನೀನು ಯೆಹೂದ್ಯರ ಅರಸನೋ>> ಎಂದು ಕೇಳಲು ಆತನು, <<ನೀನೇ ಹೇಳಿದ್ದೀ>> ಎಂದು ಉತ್ತರಕೊಟ್ಟನು.3ಮುಖ್ಯಯಾಜಕರು ಆತನ ಮೇಲೆ ತುಂಬಾ ದೂರು ಹೇಳುತ್ತಿದ್ದರು.4ಆಗ ಪಿಲಾತನು ಪುನಃ ಯೇಸುವನ್ನು, <<ನೀನು ಏನೂ ಉತ್ತರಕೊಡುವುದಿಲ್ಲವೇ? ಇವರು ನಿನ್ನ ಮೇಲೆ ತುಂಬಾ ದೂರುಗಳನ್ನು ಹೇಳುತ್ತಿದ್ದಾರೆ ನೋಡು>> ಎಂದು ಹೇಳಿದನು.5ಆದರೆ ಯೇಸು ಏನೂ ಉತ್ತರಕೊಡಲಿಲ್ಲ. ಅದನ್ನು ನೋಡಿ ಪಿಲಾತನು ಆಶ್ಚರ್ಯಪಟ್ಟನು.6ಪ್ರತಿ ಪಸ್ಕಹಬ್ಬದಲ್ಲಿ ಜನರು ಬೇಡಿದ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಅಧಿಕಾರಕ್ಕೆ ಸೇರಿದ ಪದ್ಧತಿಯಾಗಿತ್ತು.7ಅಲ್ಲಿ ಬರಬ್ಬನೆಂಬುವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆ ಮಾಡಿದ ದಂಗೆಗಾರರೊಂದಿಗೆ ಬಂಧಿಸಿದ್ದರು.8ಜನರು ಪಿಲಾತನ ಬಳಿಗೆ ಹೋಗಿ, ನೀನು ನಮಗೆ ಮಾಡುತ್ತಾ ಬಂದ ಪದ್ಧತಿಯ ಪ್ರಕಾರ ಮಾಡು ಎಂದು ಕೇಳಿಕೊಳ್ಳುತ್ತಿದ್ದರು.9-10ಮುಖ್ಯಯಾಜಕರು ಅಸೂಯೆಯಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು, <<ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತಿರೋ?>> ಎಂದು ಅವರನ್ನು ಕೇಳಿದನು.11ಆದರೆ ಮುಖ್ಯಯಾಜಕರು, ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬುದಾಗಿ ಜನರನ್ನು ಪ್ರೇರೇಪಿಸಿದರು.12ಅದಕ್ಕೆ ಪಿಲಾತನು ತಿರುಗಿ ಅವರನ್ನು, <<ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ?>> ಎಂದು ಕೇಳಿದನು.13ಅವರು, <<ಅವನನ್ನು ಶಿಲುಬೆಗೆ ಹಾಕಿಸು>> ಎಂದು ಮತ್ತಷ್ಟು ಕೂಗಿಕೊಂಡರು.14ಪಿಲಾತನು, <<ಏಕೆ? ಇವನು ಏನು ಅಪರಾಧ ಮಾಡಿದ್ದಾನೆ?>> ಅಂದನು. ಆದರೆ ಅವರು, <<ಅವನನ್ನು ಶಿಲುಬೆಗೆ ಹಾಕಿಸು>> ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿ ಕೂಗಿಕೊಂಡರು.15ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.ಯೇಸುವನ್ನು ಪರಿಹಾಸ್ಯಮಾಡಿದ್ದು
(ಮತ್ತಾ. 27:27-56; ಲೂಕ 23:26-49; ಯೋಹಾ. 19:17-30)
16ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು.17ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟರು.18ಅನಂತರ, <<ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ>> ಎಂದು ಆತನಿಗೆ ಅಪಹಾಸ್ಯಮಾಡಿ ವಂದಿಸಿದರು.19ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು.20ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.ಯೇಸುವನ್ನು ಶಿಲುಬೆಗೇರಿಸಿದ್ದು
21ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.22ಬಳಿಕ ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ <<ತಲೆಬುರುಡೆಗಳು ಇರುವ ಸ್ಥಳ>> ಎಂದರ್ಥ.23ಅಲ್ಲಿ ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ಅದನ್ನು ಕುಡಿಯಲಿಲ್ಲ.24ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿಕೊಂಡರು.25ಆತನನ್ನು ಶಿಲುಬೆಗೆ ಹಾಕುವಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು.26<<ಈತನು ಯೆಹೂದ್ಯರ ಅರಸನು>> ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು.27ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಆತನ ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.28-29 ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು. ಅಲ್ಲಿ ಹಾದುಹೋಗುವವರು ತಲೆ ಆಲ್ಲಾಡಿಸಿ <<ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಪುನಃ ಕಟ್ಟುವವನೇ,30ಶಿಲುಬೆಯಿಂದ ಇಳಿದು ನಿನ್ನನ್ನು ರಕ್ಷಿಸಿಕೋ>> ಎಂದು ಆತನನ್ನು ಅಪಹಾಸ್ಯ ಮಾಡಿದರು.31ಅದೇ ಮೇರೆಗೆ ಮುಖ್ಯಯಾಜಕರೂ ಶಾಸ್ತ್ರಿಗಳೂ, <<ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.32ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ>> ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.ಯೇಸುವಿನ ಮರಣ
33 ಹನ್ನೆರಡು ಗಂಟೆಯಿಂದ ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.34ಮೂರು ಗಂಟೆಗೆ ಯೇಸು, <<ಎಲೋಹಿ, ಎಲೋಹಿ, ಲಮಾಸಬಕ್ತಾನೀ?>> ಅಂದರೆ <<ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?>> ಎಂದು ಮಹಾಧ್ವನಿಯಿಂದ ಕೂಗಿದನು.35ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, <<ನೋಡಿರಿ, ಆತನು ಎಲೀಯನನ್ನು ಕರೆಯುತ್ತಾನೆ>> ಅಂದರು.36ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, <<ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೊ ಕಾದು ನೋಡೋಣ>> ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು.37ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣ ಬಿಟ್ಟನು.38ಆಗ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.39ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, <<ನಿಜವಾಗಿ ಈ ಮನುಷ್ಯನು ದೇವಕುಮಾರನೇ>> ಅಂದನು.40-41ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು.ಯೇಸುವಿನ ದೇಹವನ್ನು ಸಮಾಧಿಯಲ್ಲಿಟ್ಟದ್ದು
(ಮತ್ತಾ. 27:57-61; ಲೂಕ 23:50-56; ಯೋಹಾ. 19:38-42)
42ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ‘ಸಿದ್ಧತೆಯ’ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನವಾಗಿತ್ತು.43ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು.44ಪಿಲಾತನು, ಅವನು ಇಷ್ಟು ಬೇಗ ಸತ್ತು ಹೋದನೋ ಎಂದು ಹೇಳಿ ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ, ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿದನು.45ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದುಕೊಂಡು ಅವನ ಪಾರ್ಥಿವ ಶರೀರವನ್ನು ಯೋಸೇಫನಿಗೆ ಕೊಡಿಸಿದನು.46ಯೋಸೇಫನು ನಾರುಮಡಿಯನ್ನು ಕೊಂಡುತಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು.47ಮಗ್ದಲದ ಮರಿಯಳೂ ಮತ್ತು ಯೋಸೆಯನ ತಾಯಿ ಮರಿಯಳೂ ಯೇಸುವನ್ನಿಟ್ಟಿದ್ದ ಸ್ಥಳವನ್ನು ನೋಡಿದರು.
16ಯೇಸುವಿನ ಪುನರುತ್ಥಾನ
(ಮತ್ತಾ. 28:1-8; ಲೂಕ 24:1-10; ಯೋಹಾ. 20:1)
1ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.2ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು.3<<ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.4ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು.5ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ಉಡುಪನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.6ಅವನು ಅವರಿಗೆ, <<ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,7ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ>> ಎಂದು ಹೇಳಿದನು.8ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.9 ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು.10ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು.11<<ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು>> ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ.ಯೇಸು ಜೀವಿತನಾಗಿ ಎದ್ದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡಿದ್ದು
12 ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು.13ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ.14ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.15ಆ ಮೇಲೆ ಅವರಿಗೆ, << ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.16ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.17ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;18ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು>> ಎಂದು ಹೇಳಿದನು.ಯೇಸು ಪರಲೋಕಕ್ಕೆ ಒಯ್ಯಲ್ಪಟ್ಟದ್ದು
19ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.20ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
ಲೂಕನು ಬರೆದ ಸುವಾರ್ತೆ
1ಪೀಠಿಕೆ
1-2ಅತೀ ಶ್ರೇಷ್ಠನಾದ ಥೆಯೊಫಿಲನೇ, ನಮ್ಮಲ್ಲಿ ನಿಶ್ಚಯಕ್ಕೆ ಬಂದಿರುವ ಕಾರ್ಯಗಳನ್ನು ಮೊದಲಿಂದ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಕಾರ್ಯಗಳನ್ನು ಚರಿತ್ರರೂಪವಾಗಿ ಬರೆಯುವುದಕ್ಕೆ ಅನೇಕರು ಪ್ರಯತ್ನಿಸಿರಲಾಗಿ3ನಾನು ಬುಡದಿಂದ ಎಲ್ಲವನ್ನೂ ಚೆನ್ನಾಗಿ ವಿಚಾರಿಸಿದವನಾದ ಕಾರಣ ಅವುಗಳನ್ನು ನಿಮಗೆ ಕ್ರಮವಾಗಿ ಬರೆಯುವುದು ಒಳ್ಳೆಯದೆಂದು ನನಗೂ ತೋಚಿತು.4ನಿಮಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನೀವು ತಿಳಿದುಕೊಳ್ಳಬಹುದು.ದೇವದೂತನು ಸ್ನಾನಿಕನಾದ ಯೋಹಾನನ ಜನನವನ್ನು ಮುಂತಿಳಿಸಿದ್ದು
5ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್.6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನೇಮ ನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.7ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ಮುಪ್ಪಿನವರಾಗಿದ್ದರು.8ಹೀಗಿರಲಾಗಿ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿರಲು9ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದು ಯಾಜಕರ ಪದ್ಧತಿಯ ಪ್ರಕಾರ ಅವನ ಪಾಲಿಗೆ ಬಂತು.10ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನರ ಗುಂಪೆಲ್ಲಾ ಹೊರಗೆ ನಿಂತು ದೇವರನ್ನು ಪ್ರಾರ್ಥಿಸುತ್ತಿರಲಾಗಿ11ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು.12ಜಕರೀಯನು ಅವನನ್ನು ಕಂಡು ನಡುಗುತ್ತಾ ಭಯಹಿಡಿದವನಾದನು.13ಆದರೆ ಆ ದೂತನು ಅವನಿಗೆ - ಜಕರೀಯಾ, ಭಯಪಡಬೇಡ; ನಿನ್ನ ವಿಜ್ಞಾಪನೆ ದೇವರಿಗೆ ಮುಟ್ಟಿತು; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು.14ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು. ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು.15ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ ಯಾವ ಮಧ್ಯವನ್ನಾಗಲಿ ಕುಡಿಯದವನಾಗಿರುವನು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮ ಭರಿತನಾಗಿರುವನು.16ಇಸ್ರಾಯೇಲ್ಯರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು. ಅವನು ಆತನ ಮುಂದೆ ಹೋಗಿ ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ17ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು ಎಂದು ಹೇಳಿದನು.18ಜಕರೀಯನು ಆ ದೂತನಿಗೆ - ಇದನ್ನು ನಾನು ಹೇಗೆ ತಿಳುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ದಿನಹೋದವಳು ಎಂದು ಹೇಳಿದ್ದಕ್ಕೆ19ಆ ದೂತನು - ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನ ಕೂಡ ಮಾತಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.20ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಅದನ್ನು ನಂಬದೆಹೋದದ್ದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವಿ ಎಂದು ಅವನಿಗೆ ಉತ್ತರಕೊಟ್ಟನು.21ಇಷ್ಟರೊಳಗೆ ಜನರು ಜಕರೀಯನನ್ನು ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.22ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತಾಡಲಾರದೆ ಇರಲು ಅವರು - ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.23ಆತನ ಯಾಜಕವರ್ಗದ ದಿನಗಳು ತೀರಿದನಂತರ ಜಕರೀಯನು ತನ್ನ ಮನೆಗೆ ಹೋದನು.24ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು.25ಕರ್ತನು ಈ ಕಾಲದಲ್ಲಿ ನನ್ನನ್ನು ಕಟಾಕ್ಷಿಸಿ ನನಗೆ ಈ ರೀತಿಯಾಗಿ ಮಾಡಿ ಜನರಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ ಎಂದು ಹೇಳಿದಳು.ದೇವದೂತನು ಯೇಸುವಿನ ಜನನವನ್ನು ಮುಂತಿಳಿಸಿದ್ದು
26ಆರನೆಯ ತಿಂಗಳಲ್ಲಿ ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ ನಜರೇತೆಂಬ ಊರಿಗೆ ಒಬ್ಬ ಕನ್ಯೆಯ ಬಳಿಗೆ ಕಳುಹಿಸಿದನು;27ಆ ಕನ್ಯೆಯ ಹೆಸರು ಮರಿಯಳು; ಆಕೆಯು ದಾವೀದನ ಮನೆತನದ ಯೋಸೇಫನೆಂಬ ಪುರುಷನಿಗೆ ವಿವಾಹ ನಿಶ್ಚಿತಾರ್ಥವಾಗಿದ್ದಳು.28ಆ ದೂತನು ಆಕೆಯ ಬಳಿಗೆ ಬಂದು ‘ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ’; ‘ಕರ್ತನು ನಿನ್ನ ಸಂಗಡ ಇದ್ದಾನೆ’ ಅಂದನು.29ಆಕೆಯು ಆ ಮಾತಿಗೆ ತತ್ತರಿಸಿ - ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿರಲಾಗಿ30ಆ ದೂತನು ಆಕೆಗೆ - ಮರಿಯಳೇ, ಹೆದರಬೇಡ; ನಿನಗೆ ದೇವರ ದಯೆ ದೊರಕಿತು.31ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು32ಆತನು ಮಹಾಪುರುಷನಾಗಿ ಪರಾತ್ಪರನ ಕುಮಾರನೆನಿಸಿಕೊಳ್ಳುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.33ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ ಎಂದು ಹೇಳಿದನು.34ಆಗ ಮರಿಯಳು ಆ ದೂತನಿಗೆ - ಇದು ಹೇಗಾದೀತು? ನಾನು ಇನ್ನೂ ಪುರುಷನನ್ನು ಅರಿತವಳಲ್ಲವಲ್ಲಾ ಎಂದು ಕೇಳಿದ್ದಕ್ಕೆ ದೂತನು -35ನಿನ್ನ ಮೇಲೆ ಪವಿತ್ರಾತ್ಮ ಬರುವದು; ಪರಾತ್ಪರನ ಶಕ್ತಿಯ ನೆರಳು ನಿನ್ನ ಮೇಲೆ ಬೀಳುವುದು; ಆದದರಿಂದ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವದು.36ಮತ್ತು ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು.37ದೇವರಿಂದ ಅಸಾದ್ಯವಾದದ್ದು ಯಾವುದೂ ಇಲ್ಲ ಮತ್ತು ದೇವರಿಂದ ಬರುವ ಯಾವ ಮಾತಾದರೂ ನಿಷ್ಫಲವಾಗುವದಿಲ್ಲ ಅಂದನು.38ಆಗ ಮರಿಯಳು ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗಾಗಲಿ ಅಂದಳು. ಆ ಮೇಲೆ ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.ಯೇಸುವಿನ ತಾಯಿಯಾದ ಮರಿಯಳು ಯೋಹಾನನ ತಾಯಿಗೆ ಭೇಟಿಕೊಟ್ಟದ್ದು, ಮತ್ತು ದೇವರನ್ನು ಕೊಂಡಾಡಿದ್ದು
39ಆ ಕಾಲದಲ್ಲಿ ಮರಿಯಳು ಎದ್ದು ಅವಸರದಿಂದ ಮಲೆನಾಡಿಗೆ ಹೊರಟು ಯೆಹೂದದಲ್ಲಿರುವ ಒಂದೂರಿಗೆ ಹೋಗಿ40ಜಕರೀಯನ ಮನೆಯನ್ನು ಸೇರಿ ಎಲಿಸಬೇತಳಿಗೆ ವಂದಿಸಿದಳು.41ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಪಕ್ಕನೆ ಕುಣಿದಾಡಿತು.42ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾಗಿ ಮಹಾಧ್ವನಿಯಿಂದ ಕೂಗಿ - ನೀನು ಸ್ತ್ರೀಯರೊಳಗೆ ಆಶೀರ್ವಾದ ಹೊಂದಿದವಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು.43ನನ್ನ ಸ್ವಾಮಿಯ ತಾಯಿಯು ನನ್ನ ಬಳಿಗೆ ಬರುವಷ್ಟು ಭಾಗ್ಯ ನನಗೆ ಎಲ್ಲಿಂದಾಯಿತು?44ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ನಲಿದಾಡಿತು. ಇದನ್ನು ನಂಬಿದವಳಾದ ನೀನು ಧನ್ಯಳೇ;45ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು.46ಆಗ ಮರಿಯಳು ಹೇಳಿದ್ದೇನಂದರೆ -ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ,
47ನನ್ನ ಆತ್ಮವು ನನ್ನ ರಕ್ಷಕನಾದ ದೇವರ ವಿಷಯದಲ್ಲಿ ಉಲ್ಲಾಸಗೊಂಡದೆ. 48ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ.ಇಗೋ, ಇಂದಿನಿಂದ ತಲತಲಾಂತರದವರೆಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು.
49ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದದ್ದು. 50ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವದು.
51ಆತನು ತನ್ನ ಹೃದಯ ವಿಚಾರಗಳಲ್ಲಿ ಅಹಂಕರಿಸಿದವರನ್ನು ಚದರಿಸಿಬಿಟ್ಟಿದ್ದಾನೆ. 52ಪ್ರಭುಗಳನ್ನು ಸಿಂಹಾಸನಗಳಿಂದ ಕೆಳಗೆ ದೊಬ್ಬಿ ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ.
53ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ ಸ್ಥಿತಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ. 54ಆತನು ನಮ್ಮ ಪೂರ್ವಿಕರಿಗೆ ಹೇಳಿದ್ದಕ್ಕೆ ಸರಿಯಾಗಿ
55ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬದನ್ನು ನೆನಸಿಕೊಂಡು ತನ್ನ ಸೇವಕನಾದ ಇಸ್ರಾಯೇಲನನ್ನು ಕೈಹಿಡಿದಿದ್ದಾನೆ 56ಅಂದಳು. ಮರಿಯಳು ಹೆಚ್ಚು ಕಡಿಮೆ ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿದ್ದು ತನ್ನ ಮನೆಗೆ ಹಿಂತಿರುಗಿ ಹೋದಳು.ಸ್ನಾನಿಕನಾದ ಯೋಹಾನನ ಜನನವೂ ನಾಮಕರಣವೂ. ಅವನ ತಂದೆಯು ದೇವರನ್ನು ಕೊಂಡಾಡಿದ್ದು
57ಎಲಿಸಬೇತಳು ದಿನತುಂಬಿ ಗಂಡುಮಗುವನ್ನು ಹೆತ್ತಳು.58ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ದಯೆಯನ್ನು ವಿಶೇಷವಾಗಿ ತೋರಿಸಿದ್ದಾನೆಂಬದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು.59ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು.60ಈ ವಿಷಯದಲ್ಲಿ ಎಲಿಸಬೇತಳು <<ಅದು ಬೇಡ, ಯೋಹಾನನೆಂದು ಹೆಸರಿಡಬೇಕು>> ಅನ್ನಲು61ಅವರು - <<ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲಾ>> ಎಂದು ಆಕೆಗೆ ಹೇಳಿ62ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬದಾಗಿ ಜಕರೀಯನಿಗೆ ಸನ್ನೆಮಾಡಿದರು.63ಅವನು ಒಂದು ಹಲಗೆಯನ್ನು ತರಿಸಿಕೊಂಡು - <<ಆತನ ಹೆಸರು ಯೋಹಾನನು>> ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು.64ಕೂಡಲೆ ಅವನಿಗೆ ಬಾಯಿ ಬಂತು, ನಾಲಿಗೆ ಸಡಿಲವಾಯಿತು, ಅವನು ಮಾತಾಡುವ ಶಕ್ತಿಯುಳ್ಳವನಾಗಿ ದೇವರನ್ನು ಕೊಂಡಾಡಿದನು.65ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು; ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತಾಡಿಕೊಳ್ಳುತ್ತಿದ್ದರು.66ಕೇಳಿದವರೆಲ್ಲರೂ - <<ಆಹಾ, ಈ ಕೂಸು ಎಂಥವನಾಗುವನೋ?>> ಎಂದು ಈ ಸಂಗತಿಗಳನ್ನು ಮನಸ್ಸಿನಲ್ಲಿಟ್ಟುಕೊಂಡರು ಮತ್ತು ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು.67ಇದಲ್ಲದೆ ಆ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಪ್ರವಾದನವಚನವನ್ನು ನುಡಿದದ್ದೇನಂದರೆ -68-70<<ಇಸ್ರಾಯೇಲ್ ಜನರ ದೇವರಾಗಿರುವ ಕರ್ತನಿಗೆ ಸ್ತೋತ್ರವು;ಆತನು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ತಾನು ಹೇಳಿದಂತೆಯೇ
ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ;
ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.
71-73ಆತನು ನಮ್ಮ ಪಿತೃಗಳಿಗೆ ದಯೆಯನ್ನು ತೋರಿಸುವವನಾಗಿಯೂನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿಯೂ ಇದ್ದು
ನಮ್ಮ ವೈರಿಗಳಿಂದಲೂ ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ.
74-75ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದುನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ
ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.
76ಮಗುವೇ, ನೀನಾದರೋ ಪರಾತ್ಪರನ ಪ್ರವಾದಿಯೆನಿಸಿಕೊಳ್ಳುವಿ.ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ
77-78ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಪರಿಹಾರವೆಂಬ ರಕ್ಷಣೆಯ ತಿಳುವಳಿಕೆಯನ್ನು ಆತನ ಪ್ರಜೆಗೆ ತೋರಿಸಿ ಕೊಡುವವನಾಗಿಯೂ ಇರುವಿ.ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ ಅದು
79ಕತ್ತಲಲ್ಲಿಯೂ ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದರುವವರಾದ ನಮಗೆ ಬೆಳಕನ್ನುಕೊಟ್ಟುನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವದು>> ಅಂದನು.
80ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಅರಣ್ಯ ಪ್ರದೇಶಗಳಲ್ಲಿ ಇದ್ದನು. 2ಯೇಸು ಕ್ರಿಸ್ತನ ಜನನವೂ; ದೇವದೂತರು ಅದನ್ನು ಕುರುಬರಿಗೆ ತಿಳಿಸಿದ್ದು
1ಆ ಕಾಲದಲ್ಲಿ ರಾಜ್ಯವೆಲ್ಲಾ ಜನಗಣತಿಯನ್ನು ಬರಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಅಗಸ್ತನಿಂದ ಹೊರಟಿತು.2ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ಈ ಮೊದಲನೆಯ ಜನಗಣತಿಯು ನಡೆಯಿತು.3ಆಗ ಎಲ್ಲರೂ ಜನಗಣತಿಯನ್ನು ಬರೆಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು.4-5ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ಬರೆಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಮರಿಯಳ ಸಂಗಡ ಗಲಿಲಾಯಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.6ಅವರು ಅಲ್ಲಿದ್ದಾಗ ಆಕೆಗೆ ಪ್ರಸವಕ್ಕೆ ದಿನತುಂಬಿತು.7ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.8ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರೀಹಿಂಡನ್ನು ಕಾಯುತ್ತಿರಲಾಗಿ9ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು.10ಆ ದೂತನು ಅವರಿಗೆ - <<ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭಸಮಾಚಾರವನ್ನು ನಿಮಗೆ ತಿಳಿಸುತ್ತೇನೆ.11ಅದೇನಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.12ಅದರ ಗುರುತೇನಂದರೆ - ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ>> ಎಂದು ಹೇಳಿದನು.13ಫಕ್ಕನೆ ಆ ದೂತನ ಸಂಗಡ ಪರಲೋಕಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿ ಕೊಂಡು -
14<<ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ,ಭೂಲೋಕದಲ್ಲಿ ಮನುಷ್ಯರೊಳಗೆ ಸಮಾಧಾನ
ದೇವರು ಅವರಿಗೆ ಒಲಿಯುತ್ತಾನೆ>>
ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.
15ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು - <<ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡೋಣ ನಡೆಯಿರಿ>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು ತಟ್ಟನೆ ಹೋಗಿ16ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು.17ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ದೇವದೂತನು ತಮಗೆ ಹೇಳಿದ್ದ ಮಾತನ್ನು ಅವರಿಗೆ ತಿಳಿಸಿದರು.18ಅದನ್ನು ಕೇಳಿದವರೆಲ್ಲರೂ ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು.19ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಯೋಚಿಸುತ್ತಿದ್ದಳು.20ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟತಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು.ಯೇಸುವಿನ ನಾಮಕರಣ ಮತ್ತು ಆತನನ್ನು ದೇವಾಲಯದಲ್ಲಿ ದೇವರಿಗೆ ಸಮರ್ಪಿಸಿದ್ದು
21ಆ ಕೂಸಿಗೆ ಸುನ್ನತಿಮಾಡುವುದಕ್ಕೆ ಕಳೆಯಬೇಕಾದ ಎಂಟು ದಿವಸಗಳು ತುಂಬಿದ ಮೇಲೆ ಸೂಚಿಸಿದ ಪ್ರಕಾರ ಯೇಸು ಎಂದು ಹೆಸರಿಟ್ಟನು. ಮಗುವು ಗರ್ಭದಲ್ಲಿ ರೂಪಿಸಲ್ಪಡುವದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.22ಬಳಿಕ ಮೋಶೆಯ ನಿಯಮದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ತುಂಬಲು ಅವರು ಆ ಕೂಸನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋದರು.23ಯಾಕೆಂದರೆ <<ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು>> ಎಂಬುದಾಗಿ ಕರ್ತನ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಅದನ್ನು ಕರ್ತನಿಗೆ ಸಮರ್ಪಿಸಬೇಕಾಗಿತ್ತು.24ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು <<ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ>> ಬಲಿಕೊಡಬೇಕಾಗಿತ್ತು.25ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದು ಇಸ್ರಾಯೇಲ್ ಜನರನ್ನು ಸಂತೈಸುವವನು ಯಾವಾಗ ಬರುವನೊ ಎಂದು ನಿರೀಕ್ಷಿಸುತ್ತಾ ಇದ್ದನು; ಮತ್ತು ಆತನು ಪವಿತ್ರಾತ್ಮ ಪ್ರೇರಿತನಾಗಿದ್ದನು.26ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.27ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು; ಆಗ ತಂದೆತಾಯಿಗಳು ಯೇಸುವೆಂಬ ಮಗುವಿಗೆ ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡಿಸಬೇಕೆಂದು ಮಗುವನ್ನು ಒಳಕ್ಕೆ ತರಲು28ಅವನು ಆ ಮಗುವನ್ನು ತನ್ನ ಕೈಯಲ್ಲಿ ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ -29<<ಕರ್ತನೇ, ನಿನ್ನ ಮಾತು ನೆರವೇರಿತು;ಈಗ ಸಮಾಧಾನದಿಂದ ಹೋಗುವದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.
30ನೀನು ನೇಮಿಸಿರುವ ರಕ್ಷಕನನ್ನು ನಾನು ಕಣ್ಣಾರೆ ಕಂಡೆನು.
31ಎಲ್ಲಾ ಜನಗಳಿಗೆ ಅವನು ಪ್ರತ್ಯಕ್ಷನಾಗಲಿ ಎಂದು ಆತನನ್ನು ಒದಗಿಸಿಕೊಟ್ಟಿದ್ದೀ.
32ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು,ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ>> ಅಂದನು.
33ಆ ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳಿಗೆ ಅದರ ತಂದೆತಾಯಿಗಳು ಆಶ್ಚರ್ಯಪಡುತ್ತಿರಲು34ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ - <<ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು; ಮತ್ತು ಜನರು ವಿರೋಧಿಸಿ ಮಾತಾಡುವದಕ್ಕೂ ಗುರುತಾಗಿರುವನು;35ಹೀಗೆ ಬಹುಜನರ ಹೃದಯದ ಆಲೋಚನೆಗಳು ಬಹಿರಂಗವಾಗುವವು; ಈ ಕಾರಣಕ್ಕಾಗಿ ಈತನು ಹುಟ್ಟಿದ್ದು. ಇದಲ್ಲದೆ ನಿನ್ನ ಸ್ವಂತ ಮನಸ್ಸಿಗಂತೂ ವೇದನೆ ಉಂಟಾಗುತ್ತದೆ>> ಎಂದು ಹೇಳಿದನು.36ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು; ಆಕೆ ತನ್ನ ಕನ್ಯಾವಸ್ಥೆ ಕಳೆದ ತರುವಾಯ ಗಂಡನ ಕೂಡ ಏಳು ವರುಷ ಬಾಳುವೆ ಮಾಡಿ37ಎಂಭತ್ತುನಾಲ್ಕು ವರುಷ ವಿಧವೆಯಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರ ಸೇವೆಯನ್ನು ಮಾಡುತ್ತಿದ್ದಳು.38ಆಕೆ ಅದೇ ಗಳಿಗೆಯಲ್ಲಿ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತಾಡುವವಳಾದಳು.39ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.40ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ದಯೆ ಇತ್ತು.ಯೇಸು ಹನ್ನೆರಡು ವರುಷದವನಾದಾಗ ಯೆರೂಸಲೇಮಿಗೆ ಹೋಗಿ ದೇವಾಲಯದಲ್ಲಿ ವಿದ್ವಾಂಸರ ಸಂಗಡ ಸಂಭಾಷಣೆ ಮಾಡಿದ್ದು.
41ಯೇಸುವಿನ ತಂದೆತಾಯಿಗಳು ಪ್ರತಿವರುಷವೂ ಪಸ್ಕ ಹಬ್ಬದ ಜಾತ್ರೆಗೆ ಯೆರೂಸಲೇಮಿಗೆ ಹೋಗುತ್ತಿದ್ದರು.42ಹೀಗಿರಲಾಗಿ ಆತನು ಹನ್ನೆರಡು ವರುಷದವನಾದಾಗ ಅವರು ಪದ್ಧತಿಯ ಪ್ರಕಾರ ಅಲ್ಲಿಗೆ ಹೋದರು.43ಹಬ್ಬದ ದಿನಗಳನ್ನು ಮುಗಿಸಿಕೊಂಡು ಹಿಂತಿರುಗಿ ಬರುವಾಗ ಬಾಲಕನಾದ ಯೇಸು ಯೆರೂಸಲೇಮಿನಲ್ಲಿಯೇ ಉಳಿದುಕೊಂಡನು. ಅವನ ತಂದೆತಾಯಿಗಳು ಅದನ್ನು ತಿಳಿಯದೆ44ಆತನು ಯಾತ್ರಿಕರ ಗುಂಪಿನಲ್ಲಿ ಸೇರಿರಬಹುದೆಂದು ಊಹಿಸಿ ಒಂದು ದಿನದ ಪ್ರಯಾಣ ಮಾಡಿ ಬಂಧುಬಾಂಧವರಲ್ಲಿಯೂ ಪರಿಚಿತರಲ್ಲಿಯೂ45ಆತನನ್ನು ಹುಡುಕಿ ಕಾಣದೆ ತಿರಿಗಿ ಯೆರೂಸಲೇಮಿಗೆ ಹುಡುಕಿಕೊಂಡು ಹೋದರು.46ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.47ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು.48ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು - <<ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ>> ಎಂದು ಹೇಳಲು49ಆತನು ಅವರಿಗೆ - <<ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದವನು ಎಂದು ನಿಮಗೆ ತಿಳಿಯಲಿಲ್ಲವೇ?>> ಎಂದು ಉತ್ತರಕೊಟ್ಟನು.50ಆದರೆ ಆತನು ಹೇಳಿದ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ.51ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.52ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ದಯೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು. 3ಸ್ನಾನಿಕನಾದ ಯೋಹಾನನು ಉಪದೇಶ ಮಾಡಿದ್ದು
(ಮತ್ತಾ 3. 1--12; ಮಾರ್ಕ 1. 2--8)
1ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರುಷದಲ್ಲಿ, ಪೊಂತ್ಯಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಉಪರಾಜನೂ ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ2ಹನ್ನನು ಮತ್ತು ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಅಡವಿಯಲ್ಲಿ ದೇವರ ವಾಕ್ಯವು ಪ್ರಕಟವಾಯಿತು.3ಆತನು ಯೊರ್ದಾನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ - ನೀವು ಪಾಪ ಪರಿಹಾರಕ್ಕಾಗಿರುವ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುತ್ತಿದ್ದನು.4-6ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನಂದರೆ -“<ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ.
ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವದು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವದು,
ಡೊಂಕಾಗಿರುವಂಥದು ನೆಟ್ಟಗಾಗುವದು, ಕೊರಕಲಾದ ದಾರಿಗಳು ಸಮವಾಗುವದು.
ಎಲ್ಲಾ ಮನುಷ್ಯರೂ ದೇವರಿಂದ ಸಿದ್ಧವಾಗುವ ರಕ್ಷಣೆಯನ್ನು ಕಾಣುವರು ಎಂಬುದಾಗಿ ಅಡವಿಯಲ್ಲಿ ಕೂಗುವವನ ಶಬ್ದವದೆ> ಎಂಬುದೇ.>>
7ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ - <<ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಉಪದೇಶ ಮಾಡಿದವರಾರು?8ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. <ಅಬ್ರಹಾಮನು ನಮಗೆ ತಂದೆಯಲ್ಲವೇ> ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.9ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು>> ಎಂದು ಹೇಳಿದನು.10ಆಗ ಆ ಗುಂಪಿನವರು - <<ಹಾಗಾದರೆ ನಾವೇನು ಮಾಡಬೇಕು?>> ಎಂದು ಆತನನ್ನು ಕೇಳಿದ್ದಕ್ಕೆ11ಆತನು - <<ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ>> ಎಂದು ಅವರಿಗೆ ಹೇಳಿದನು.12ತೆರಿಗೆವಸೂಲಿ ಮಾಡುವವರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು - <<ಗುರುವೇ, ನಾವೇನು ಮಾಡಬೇಕು>> ಎಂದು ಆತನನ್ನು ಕೇಳಲು13ಆತನು - <<ನೇಮಿಸಲ್ಪಟ್ಟಿದ್ದಕ್ಕಿಂತ ಹೆಚ್ಚಾಗಿ ಏನೂ ತೆಗೆದುಕೊಳ್ಳಬೇಡಿರಿ>> ಎಂದು ಅವರಿಗೆ ಹೇಳಿದನು.14ಸಿಪಾಯಿಗಳು ಸಹ ಬಂದು - <<ನಾವು ಏನು ಮಾಡಬೇಕು>> ಎಂದು ಆತನನ್ನು ಕೇಳಿದಾಗ ಆತನು ಅವರಿಗೆ - <<ಯಾರನ್ನಾದರೂ ಬೆದರಿಸಿ ದುಡ್ಡು ಕಸಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ>> ಎಂದು ಹೇಳಿದನು.15ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರು ನೋಡುವವರಾಗಿದ್ದದರಿಂದ ಅವರೆಲ್ಲರೂ ಯೋಹಾನನ ವಿಷಯವಾಗಿ ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು16ಯೋಹಾನನು ಅವರೆಲ್ಲರಿಗೆ - <<ನಾನಂತೂ ನಿಮಗೆ ನೀರಿನ ಸ್ನಾನಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.17ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋಧಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವುದಕ್ಕಿದ್ದಾನೆ, ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು>> ಎಂದು ಉತ್ತರಕೊಟ್ಟನು.18ಇನ್ನು ಬೇರೆ ಅನೇಕ ಮಾತುಗಳಿಂದ ಆತನು ಇಸ್ರಾಯೇಲ್ ಜನರಿಗೆ ಬುದ್ಧಿಹೇಳಿ ಸುವಾರ್ತೆಯನ್ನು ಸಾರುತ್ತಿದ್ದನು.19ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ20ಯೋಹಾನನಿಂದ ಗದರಿಸಲ್ಪಟ್ಟಿದರಿಂದ ಆತನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಪಟ್ಟಿಯನ್ನು ಇನ್ನೂ ಹೆಚ್ಚಿಸಿಕೊಂಡನು.ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡದ್ದು
(ಮತ್ತಾ. 3:13-17; ಮಾರ್ಕ 1. 9-11; ಯೋಹಾ. 1. 32-34)
21ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು;22ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ - <<ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ>> ಎಂಬ ವಾಣಿಯು ಪರಲೋಕದಿಂದ ಬಂತು.ಯೇಸು ಕ್ರಿಸ್ತನ ವಂಶಾವಳಿ
23ಯೇಸು ಉಪದೇಶಮಾಡುವದಕ್ಕೆ ಪ್ರಾರಂಭಿಸಿದಾಗ ಹೆಚ್ಚುಕಡಿಮೆ ಮೂವತ್ತು ವರುಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು.24ಯೋಸೆಫನು ಹೇಲಿಯನ ಮಗನು; ಇವನು ಮತ್ಥಾತನು ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು;25ಇವನು ಯೋಸೇಫನ ಮಗನು; ಇವನು ಮತ್ತಥೀಯನ ಮಗನು; ಇವನು ಆಮೋಸನ ಮಗನು; ಇವನು ನಹೂಮನ ಮಗನು; ಇವನು ಎಸ್ಲಿಯ ಮಗನು;26ಇವನು ನಗ್ಗಾಯನ ಮಗನು; ಇವನು ಮಹಾಥನ ಮಗನು; ಇವನು ಮತ್ತಥೀಯನ ಮಗನು; ಇವನು ಶಿಮಿಯನ ಮಗನು; ಇವನು ಯೋಸೇಖನ ಮಗನು;27ಇವನು ಯೂದನ ಮಗನು; ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾಬೆಲನ ಮಗನು, ಇವನು ಸಲಥಿಯೇಲನ ಮಗನು; ಇವನು ನೇರಿಯನ ಮಗನು;28ಇವನು ಮೆಲ್ಖಿಯನ ಮಗನು; ಇವನು ಅದ್ದಿಯನ ಮಗನು; ಇವನು ಕೋಸಾಮನ ಮಗನು; ಇವನು ಎಲ್ಮದಾಮನ ಮಗನು; ಇವನು ಏರನ ಮಗನು;29ಇವನು ಯೆಹೋಷುವನ ಮಗನು; ಇವನು ಎಲಿಯೇಜರನ ಮಗನು; ಇವನು ಯೋರೈಮನ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯನ ಮಗನು;30ಇವನು ಸಿಮಿಯೋನನ ಮಗನು; ಇವನು ಯೂದನ ಮಗನು; ಇವನು ಯೋಸೇಫನ ಮಗನು; ಇವನು ಯೋನಾಮನ ಮಗನು; ಇವನು ಎಲಿಯಕೀಮನ ಮಗನು;31ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾಥಾನನ ಮಗನು; ಇವನು ದಾವೀದನ ಮಗನು;32ಇವನು ಇಶಾಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;33ಇವನು ಅಮ್ಮಿನಾದಾಬನ ಮಗನು; ಇವನು ಆರ್ನೈಯನ ಮಗನು; ಇವನು ಎಸ್ರೋನನ ಮಗನು; ಇವನು ಪೆರೆಸನ ಮಗನು;34ಇವನು ಯೂದನ ಮಗನು; ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಾಹೋರನ ಮಗನು;35ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು;36ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;37ಇವನು ಮತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಯಿನಾನನ ಮಗನು;38ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು ಇವನು ದೇವರ ಮಗನು.
4ಸೈತಾನನು ಯೇಸುವನ್ನು ಪಾಪದಲ್ಲಿ ಸಿಕ್ಕಿಸುವುದಕ್ಕೆ ಪ್ರಯತ್ನಿಸಿದ್ದು
(ಮತ್ತಾ. 4:1-11; ಮಾರ್ಕ 1. 12,13)
1ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ ನಾಲ್ವತ್ತು ದಿವಸ2ಅಡವಿಯಲ್ಲಿ ನಡಿಸಲ್ಪಡುತ್ತಾ ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿವಸಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಅದು ಮುಗಿದ ಮೇಲೆ ಆತನಿಗೆ ಹಸಿವಾಯಿತು.3ಆಗ ಸೈತಾನನು ಆತನಿಗೆ - <<ನೀನು ದೇವರ ಮಗನಾಗಿದ್ದರೆ ಈ ಕಲ್ಲನ್ನು ರೊಟ್ಟಿಯಾಗುವಂತೆ ಅಪ್ಪಣೆ ಕೊಡು>> ಎಂದು ಹೇಳಲು4ಯೇಸು ಅವನಿಗೆ, <<ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ>> ಎಂದು ಬರೆದದೆ ಎಂದು ಉತ್ತರಕೊಟ್ಟನು.5ಬಳಿಕ ಸೈತಾನನು ಆತನನ್ನು ಮೇಲಕ್ಕೆ ಕರೆದು ಕೊಂಡು ಹೋಗಿ, ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ,6<<ಇವೆಲ್ಲವುಗಳ ಅಧಿಕಾರವನ್ನೂ ಇವುಗಳ ವೈಭವವನ್ನೂ ನಿನಗೆ ಕೊಡುವೆನು; ಇದೆಲ್ಲಾ ನನಗೆ ಕೊಡಲ್ಪಟ್ಟಿದೆ, ಇದನ್ನು ನನ್ನ ಮನಸ್ಸು ಬಂದವನಿಗೆ ಕೊಡುತ್ತೇನೆ;7ನೀನು ನನ್ನ ಮುಂದೆ ಅಡ್ಡಬಿದ್ದರೆ ಇದೆಲ್ಲಾ ನಿನ್ನದಾಗುವುದು>> ಎಂದು ಆತನಿಗೆ ಹೇಳಿದನು.8ಅದಕ್ಕೆ ಯೇಸು - <<<ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು> ಎಂಬುದಾಗಿ ಬರೆದದೆ>> ಎಂದು ಉತ್ತರಕೊಟ್ಟನು.9ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ - <<ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು.
10<ನಿನ್ನನ್ನು ಕಾಯುವದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು;
11ಮತ್ತು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು>ಎಂಬದಾಗಿ ಗ್ರಂಥದಲ್ಲಿ ಬರೆದದೆಯಲ್ಲಾ>> ಎಂದು ಹೇಳಿದನು.
12ಅದಕ್ಕೆ ಆತನು - <<ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು ಹೇಳಿದೆ>> ಎಂದು ಉತ್ತರ ಕೊಟ್ಟನು.13ಹೀಗೆ ಸೈತಾನನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕ ಸಮಯ ಬರುವ ತನಕ ಆತನನ್ನು ಬಿಟ್ಟು ಹೊರಟುಹೋದನು.ಯೇಸು ಗಲಿಲಾಯದಲ್ಲಿ ಉಪದೇಶಮಾಡಿ ಕೀರ್ತಿಹೊಂದಿದ್ದು
(ಮತ್ತಾ. 13. 54-58; ಮಾರ್ಕ 6. 1-6)
14ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.15ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.ನಜರೇತಿನವರು ಯೇಸುವನ್ನು ತಳ್ಳಿಬಿಟ್ಟದ್ದು
(ಮತ್ತಾ. 13. 54-58; ಮಾರ್ಕ 6. 1-6)
16ಹೀಗಿರಲಾಗಿ ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥ ಓದುವುದಕ್ಕಾಗಿ ಎದ್ದು ನಿಂತನು.17ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರಳಿಯನ್ನು ಬಿಚ್ಚಿ ಓದಿದನು; ಆ ಭಾಗದಲ್ಲಿ ಬರೆದಿರುವ ಸಂಗತಿಯೇನೆಂದರೆ -18<<ಕರ್ತನ ಆತ್ಮವು ನನ್ನ ಮೇಲೆ ಅದೆ,ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು.
ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕು, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ
ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವದಕ್ಕೂ
19ಕರ್ತನು ನೇಮಿಸಿರುವ ಶುಭವರ್ಷವನ್ನು ಪ್ರಚಾರಪಡಿಸುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂಬುದೇ.>> 20ಅದನ್ನು ಓದಿದ ಮೇಲೆ ಆತನು ಆ ಸುರಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕೂಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ21ಆತನು ಅವರಿಗೆ - <<ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ>> ಎಂದು ಹೇಳುತ್ತಿರುವಾಗ22ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, <<ಇವನು ಯೋಸೇಫನ ಮಗನಲ್ಲವೇ?>> ಎಂದು ಮಾತನಾಡಿಕೊಂಡರು.23ಅದಕ್ಕೆ ಯೇಸು ಅವರಿಗೆ - <<ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ>> ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.24<<ಯಾವ ಪ್ರವಾದಿಯೂ ತನ್ನ ಸ್ವಂತ ದೇಶದಲ್ಲಿ ಅಂಗಿಕರಿಸಲ್ಪಡುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.25ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರುಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;26ಆದರೆ ಅವರಲ್ಲಿ ಒಬ್ಬರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಅವನನ್ನು ಕಳುಹಿಸಿದನು.27ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು>> ಎಂದು ಹೇಳಿದನು.28ಸಭಾಮಂದಿರದಲ್ಲಿರುವವರೆಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು ಎದ್ದು ಆತನನ್ನು ಊರಹೊರಕ್ಕೆ ಅಟ್ಟಿ29ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಕಡಿದಾದ ಸ್ಥಳಕ್ಕೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು30ಆದರೆ ಆತನು ಅವರ ಮಧ್ಯದಿಂದ ನಡೆದು ತನ್ನ ಪಾಡಿಗೆ ತಾನು ಹೊರಟು ಹೋದನು.ಯೇಸು ಕಪೆರ್ನೌಮೆಂಬ ಊರಿನಲ್ಲಿ ದೆವ್ವಗಳನ್ನು ಬಿಡಿಸಿ ರೋಗಿಗಳನ್ನು ಸ್ವಸ್ಥಮಾಡಿದ್ದು
(ಮತ್ತಾ. 8. 14-17; ಮಾರ್ಕ 1. 21-39)
31ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು.32ಅಲ್ಲಿ ಸಬ್ಬತ್‍ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.33ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.34ಆ ದೆವ್ವವು - <<ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರ ಪರಿಶುದ್ದನೇ>> ಎಂದು ಕೂಗಿ ಹೇಳಿತು.35ಯೇಸು ಅದನ್ನು ಗದರಿಸಿ - <<ಸುಮ್ಮನಿರು, ಇವನನ್ನು ಬಿಟ್ಟು ಹೋಗು>> ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.36ಅದಕ್ಕೆ ಎಲ್ಲರು ಬೆರಗಾಗಿ - <<ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ>> ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.37ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹರಡಿತು.38ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ಕಠಿಣ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು.39ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರ ಮಾಡಿದಳು.40ಸಂಜೆಯಾದಂತೆ ಜನರು ತಮ್ಮ ತಮ್ಮ ಮನೆಯಲ್ಲಿ ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರೆತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.41ದೆವ್ವಗಳು ಸಹ - ನೀನು ದೇವ ಕುಮಾರನು ಎಂದು ಅಬ್ಬರಿಸಿ ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.42ಬೆಳಗಾದ ಮೇಲೆ ಆತನು ಹೊರಟು ಅಡವಿಯ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು - ನೀನು, ನಮ್ಮನ್ನು ಬಿಟ್ಟುಹೋಗಬೇಡ ಎಂದು ಆತನನ್ನು ತಡೆದರು.43ಆದರೆ ಆತನು ಅವರಿಗೆ - <<ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ>> ಎಂದು ಹೇಳಿದನು.44ಬಳಿಕ ಆತನು ಯೂದಾಯ ದೇಶದ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಇದ್ದನು. 5ಯೇಸು ಆಶ್ಚರ್ಯಕರವಾದ ರೀತಿಯಿಂದ ಮೀನುಗಳನ್ನು ದೊರಕಿಸಿಕೊಟ್ಟು ಶಿಷ್ಯರನ್ನು ಆಯ್ಕೆ ಮಾಡಿಕೊಂಡದ್ದು
1ಒಂದಾನೊಂದು ದಿವಸ ಜನರು ಗುಂಪಾಗಿ ಬಂದು ಯೇಸುವನ್ನು ಸುತ್ತುವರೆದು ದೇವರ ವಾಕ್ಯವನ್ನು ಕೇಳುತ್ತಿರಲು2ಗೆನೇಜರೆತ್ ಕೆರೆಯ ದಡದಲ್ಲಿ ನಿಂತಿದ್ದ ಆತನು ಆ ಕೆರೆಯ ದಡದಲ್ಲಿ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.3ಆ ದೋಣಿಗಳಲ್ಲಿ ಸೀಮೋನನ ಒಂದು ದೋಣಿಯನ್ನು ಯೇಸು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು.4ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ - ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು.5ಅದಕ್ಕೆ ಸೀಮೋನನು - ಗುರುವೇ, ನಾವು ರಾತ್ರಿಯೆಲ್ಲಾ ಪ್ರಯತ್ನಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಬೀಸುತ್ತೇವೆ ಅಂದನು.6ಅವರು ಬಲೆಗಳನ್ನು ಬೀಸಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಬಲೆಗೆ ಸಿಕ್ಕಿಕೊಂಡಿದ್ದರ ಪರಿಣಾಮ ಬಲೆಗಳು ಹರಿದುಹೋಗುವಂತ್ತಿದವು.7ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು - ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು ಅವು ಮುಳುಗುವ ಹಾಗಾದವು.8ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗಬೇಕು ಅಂದನು.9ಯಾಕೆಂದರೆ ಅವನಿಗೂ ಅವನ ಸಂಗಡ ಇದ್ದವರೆಲ್ಲರಿಗೂ ತಾವು ಹಿಡಿದ ಮೀನುಗಳ ನಿಮಿತ್ತ ಆಶ್ಚರ್ಯದಿಂದ ಬೆರಗಾದರು;10ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ - ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವವನಾಗಿರುವಿ ಎಂದು ಹೇಳಿದನು.11ಅವರು ತಮ್ಮ ದೋಣಿಗಳನ್ನು ತಂದು ದಡಕ್ಕೆ ಬಿಟ್ಟು ಮತ್ತು ಎಲ್ಲವನ್ನು ಬಿಟ್ಟು ಅಂದಿನಿಂದ ಯೇಸುವನ್ನು ಹಿಂಬಾಲಿಸಿದರು.ಯೇಸು ಕುಷ್ಠರೋಗಿಯನ್ನು ವಾಸಿಮಾಡಿದ್ದು
(ಮತ್ತಾ. 8. 2-4; ಮಾರ್ಕ 1. 40-45)
12ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಅಡ್ಡ ಬಿದ್ದು - ಸ್ವಾಮಿ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಎಂದು ಬೇಡಿಕೊಂಡನು.13ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧನಾಗು ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.14ಆಗ ಆತನು ಅವನಿಗೆ - ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞೆ ಮಾಡಿರಿವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ ಎಂದು ಅಪ್ಪಣೆಕೊಟ್ಟನು.15ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು; ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವದಕ್ಕೂ ತಮ್ಮ ತಮ್ಮ ಜಾಡ್ಯಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ ಗುಂಪುಗುಂಪಾಗಿ ಬಂದು ಸೇರಿದರು.16ಆದರೆ ಯೇಸು ಜನರಿಂದ ಪ್ರತ್ಯೇಕಿಸಿಕೊಂಡು ಅರಣ್ಯ ಪ್ರದೇಶಗಳಿಗೆ ಹೋಗಿ ಪ್ರಾರ್ಥನೆಯನ್ನು ಮಾಡುತ್ತಿದ್ದನು.ಯೇಸು ಪಾರ್ಶ್ವವಾಯುರೋಗಿಯ ಪಾಪವನ್ನು ಕ್ಷಮಿಸಿ ಅವನನ್ನು ಗುಣಮಾಡಿದ್ದು
(ಮತ್ತಾ. 9. 2-8; ಮಾರ್ಕ 2. 1-12.)
17ಒಂದಾನೊಂದು ದಿನದಲ್ಲಿ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ನ್ಯಾಯಶಾಸ್ತ್ರಿಗಳು ಆತನ ಹತ್ತಿರ ಕೂತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.18ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯುರೋಗದವನನ್ನು ಮಂಚದ ಮೇಲೆ ಹೊತ್ತುಕೊಂಡು ಬಂದರು; ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರೂ19ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು.20ಯೇಸು ಅವರ ನಂಬಿಕೆಯನ್ನು ನೋಡಿ - ಅವನಿಗೆ ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.21ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ - ಧರ್ಮನಿಂದೆಯ ಮಾತನ್ನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು ಎಂದು ಅಂದುಕೊಳ್ಳುತ್ತಿದ್ದರು.22ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ - ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವದೇನು?23ಯಾವದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವದೋ? ಎದ್ದು ನಡೆ ಅನ್ನುವದೋ?24ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯ ಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗದವನನ್ನು ನೋಡಿ - ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗೆಂದು ಹೇಳಿದನು.25ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು.26ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು; ಮತ್ತು ಅವರು ಭಯ ಹಿಡಿದವರಾಗಿ - ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು ಅಂದರು.ಯೇಸು ಪಾಪಿಷ್ಠರ ಸಂಗಡ ಊಟಮಾಡಿದ್ದಕ್ಕೆ ಹಾಗೂ ತನ್ನ ಶಿಷ್ಯರು ಉಪವಾಸ ಮಾಡದೆಹೋದದ್ದಕ್ಕೆ ಕಾರಣ ತಿಳಿಸಿದ್ದು
(ಮತ್ತಾ. 9. 9-17; ಮಾರ್ಕ 2. 13-22)
27ನಂತರ ಆತನು ಹೊರಟು ಸುಂಕಕ್ಕೆ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು28ಅವನು ಎಲ್ಲವನ್ನೂ ಬಿಟ್ಟು ಎದ್ದು ಆತನ ಹಿಂದೆ ಹೋದನು.29ತರುವಾಯ ಲೇವಿಯು ತನ್ನ ಮನೆಯಲ್ಲಿ ಆತನಿಗೆ ಒಂದು ದೊಡ್ಡ ಔತಣವನ್ನು ಮಾಡಿರಲು ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.30ಅದನ್ನು ಕಂಡು ಫರಿಸಾಯರೂ ಅವರಲ್ಲಿದ್ದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗುಣುಗುಟ್ಟುತ್ತಾ - ನೀವು ಸಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವದೇಕೆ ಎಂದು ಕೇಳಿದರು.31ಅದಕ್ಕೆ ಯೇಸು - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು;32ದೇವರ ಕಡೆಗೆ ತಿರುಗಿಕೊಳ್ಳಿರಿ, ನೀತಿವಂತರನ್ನು ಕರೆಯುವುದಕ್ಕೆ ನಾನು ಬಂದವನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು ಎಂದು ಅವರಿಗೆ ಉತ್ತರಕೊಟ್ಟನು.33ಅವರು ಆತನಿಗೆ - ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ34ಕುಡಿಯುತ್ತಾರೆ ಎಂದು ಹೇಳಲು, ಯೇಸು ಅವರಿಗೆ - ಮದಲಿಂಗನು ಮದುವೆ ಜನರ ಸಂಗಡ ಇರುವಲ್ಲಿ ಅವರಿಗೆ ಉಪವಾಸಮಾಡಿಸುವದಕ್ಕೆ ನಿಮ್ಮಿಂದಾದೀತೇ?35ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆಯಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು ಎಂದು ಉತ್ತರಕೊಟ್ಟನು.36ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನಂದರೆ - ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವದಲ್ಲದೆ ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ.37ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು.38ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.39ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವದಿಲ್ಲ; ಹಳೇದೇ ಉತ್ತಮ ಅನ್ನುವನು.
6ಯೇಸುವೂ ಆತನ ಶಿಷ್ಯರೂ ಸಬ್ಬತ್‍ದಿನವನ್ನು ಅಲಕ್ಷ್ಯಮಾಡುತ್ತಾರೆಂದು ಫರಿಸಾಯರು ಆತನ ಮೇಲೆ ಆಕ್ಷೇಪಣೆಮಾಡಿದ್ದು
(ಮತ್ತಾ. 12:1-14; ಮಾರ್ಕ 2. 23-3,6)
1ಒಂದಾನೊಂದು ಸಬ್ಬತ್‍ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಗಿ ಕೊಂಡು ತಿನ್ನುತ್ತಿದ್ದರು.2ಆದರೆ ಫರಿಸಾಯರಲ್ಲಿ ಕೆಲವರು - ಸಬ್ಬತ್‍ದಿನದಲ್ಲಿ ನೀವು ಮಾಡಬಾರದ ಕೆಲಸವನ್ನು ಯಾಕೆ ಮಾಡುತ್ತೀರಿ ಎಂದು ಕೇಳಿದ್ದಕ್ಕೆ3ಯೇಸು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿವಾದಾಗ ಏನು ಮಾಡಿದನೆಂಬದನ್ನು ನೀವು ಓದಲಿಲ್ಲವೋ?4ಅವನು ದೇವರ ಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ? ಎಂದು ಉತ್ತರಿಸಿ,5ಮನುಷ್ಯಕುಮಾರನು ಸಬ್ಬತ್‍ದಿನಕ್ಕೆ ಒಡೆಯನಾಗಿದ್ದಾನೆ ಎಂದು ಅವರಿಗೆ ಹೇಳಿದನು.6ಮತ್ತೊಂದು ಸಬ್ಬತ್‍ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.7ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್‍ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.8ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ - ಎದ್ದು ನಡುವೆ ಬಂದು ನಿಂತುಕೋ ಎಂದು ಹೇಳಿದನು.9ಅವನು ಎದ್ದು ನಿಂತುಕೊಂಡನು. ಆಗ ಯೇಸು ಅವರಿಗೆ - ನಿಮ್ಮನ್ನು ಒಂದು ಮಾತು ಕೇಳುತ್ತೇನೆ; ಸಬ್ಬತ್‍ದಿನದಲ್ಲಿ ಯಾವುದನ್ನು ಮಾಡುವದು ನ್ಯಾಯ? ಮೇಲನ್ನು ಮಾಡುವುದೋ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಹಾಳುಮಡುವುದೋ ಎಂದು ಕೇಳಿ ಸುತ್ತಲೂ ಇದ್ದವರೆಲ್ಲರನ್ನೂ ನೋಡಿ10ಆ ಮನುಷ್ಯನಿಗೆ - ‘ನಿನ್ನ ಕೈಚಾಚು’ ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು; ಕೈವಾಸಿಯಾಯಿತು11ಆದರೆ ಅವರಲ್ಲಿ ದುರ್ಬುದ್ಧಿ ತುಂಬಿದ್ದದರಿಂದ - ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.ಯೇಸು ಹನ್ನೆರಡು ಮಂದಿ ಅಪೋಸ್ತಲರನ್ನು ನೇಮಿಸಿದ್ದು
(ಮತ್ತಾ. 10. 2-4; ಮಾರ್ಕ 3. 13-19)
12ಆ ದಿನಗಳಲ್ಲಿ ಯೇಸುವು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ಪ್ರಾರ್ಥನೆಯಲ್ಲೇ ಕಳೆದನು.13ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.14ಅವರು ಯಾರಾರೆಂದರೆ - ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೇಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,15ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ,16ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ ಇವರೇ.ಯೇಸು ಪರ್ವತದ ಮೇಲೆ ಮಾಡಿದ ಪ್ರಸಂಗ
(ಮತ್ತಾ. 5. 3-12; 39-48; 7. 1-5; 16-18; 24-27)
17ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವದಕ್ಕೂ ಬಂದಿದ್ದರು.18ಅವರಲ್ಲಿ ದೆವ್ವಗಳ ಕಾಟವಿದ್ದವರು ಸ್ವಸ್ಥವಾದರು.19ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.20ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ -21ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.22ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.23ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪಿತೃಗಳು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.24ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ.25ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಿಪಟ್ಟು ಅಳುವಿರಿ.26ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪಿತೃಗಳು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು.27ಕೇಳುವವರಾದ ನಿಮಗೆ ನಾನು ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;28ನಿಮ್ಮನ್ನು ಶಪಿಸುವವರಿಗೆ ಆಶೀರ್ವಾದಮಾಡಿರಿ; ನಿಮ್ಮನ್ನು ಬಯ್ಯುವವರಿಗೋಸ್ಕರ ದೇವರಲ್ಲಿ ಪ್ರಾರ್ಥಿಸಿರಿ.29ನಿನ್ನ ಒಂದು ಕೆನ್ನೆಯ ಮೇಲೆ ಹೊಡದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸಿರಿ; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡಿರಿ.30ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಆಸ್ತಿಯನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.31ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ.32ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.33ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.34ಅವರು ನಮಗೂ ಸಾಲಕೊಟ್ಟಾರೆಂದು ನೀವು ಯಾರಿಗಾದರೂ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರಿಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.35ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂನಿರೀಕ್ಷಿಸದೆ ಸಾಲಕೊಡಿರಿ; ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.36ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.37ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ;ಬಿಡಿಸಿರಿ ಆಗ ನಿಮ್ಮನ್ನೂ ಬಿಡಿಸುವರು;38ಕೊಡಿರಿ, ಆಗ ನಿಮಗೂ ಕೊಡುವರು; ಜಡಿದು ಅಲ್ಲಾಡಿಸಿ ಹೊರ ಚೆಲ್ಲುವ ಹಾಗೆ ತುಂಬಿ ಅಳೆದು ನಿಮ್ಮ ಸೆರಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ದೇವರು ನಿಮಗೂ ಅಳೆದುಕೊಡುವರು ಅಂದನು.39ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನಂದರೆ - ಕುರುಡನು ಕುರುಡನಿಗೆ ದಾರೀ ತೋರುಸುವದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ.40ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಹೆಚ್ಚು ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.41ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಗಮನಿಸುವುದೇಕೆ?42ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನೇ ನೀನು ನೋಡದೆ ನಿನ್ನ ಸಹೋದರನಿಗೆ - ಅಣ್ಣಾ, ನಿನ್ನ ಕಣ್ಣಿನೊಳಗಿನ ರವೆಯನ್ನು ತೆಗೆಯುತ್ತೇನೆ ಬಾ ಎಂದು ಹೇಳುವದಕ್ಕೆ ಹೇಗಾದೀತು? ಮೋಸಗಾರನೇ, ಮೊದಲು ನಿನ್ನ ಕಣ್ಣಿನೊಳಗಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ರವೆಯನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.43ಒಳ್ಳೆಯ ಮರವು ಹುಳುಕು ಫಲವನ್ನು ಕೊಡುವದಿಲ್ಲ; ಹಾಗೆಯೇ ಹುಳುಕುಮರವು ಒಳ್ಳೆಯ ಫಲವನ್ನು ಕೊಡುವದಿಲ್ಲ.44ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ; ಗಜ್ಜುಗದ ಪೊದೆಗಳಲ್ಲಿ ದ್ರಾಕ್ಷೇಹಣ್ಣುಗಳನ್ನು ಕೊಯ್ಯುಲುಸಾಧ್ಯವಿಲ್ಲ.45ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.46ಇದಲ್ಲದೆ ನೀವು ನನ್ನನ್ನು ಕರ್ತನೇ ಕರ್ತನೇ ಎಂದು ಕರೆದು ನಾನು ಹೇಳುವದನ್ನು ಮಾಡದೆ ಇರುವುದೇಕೆ?47ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಯಾರಿಗೆ ಸಮಾನನೆಂಬದನ್ನು ನಿಮಗೆ ತೋರಿಸುತ್ತೇನೆ.48ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು; ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಅಡಿಪಾಯ ಹಾಕಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.49ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿದ್ದು ನಾಶವಾಗಿ ಹೋಯಿತು.
7ಯೇಸು ಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದು
(ಮತ್ತಾ. 8. 5-13)
1ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ ಕಪೆರ್ನೌಮಿಗೆ ಬಂದನು.2ಅಲ್ಲಿ ದಂಡಿನ ಶತಾಧಿಪತಿಗೆ ಇಷ್ಟನಾದ ಒಬ್ಬ ಆಳು ಕ್ಷೇಮವಿಲ್ಲದೆ ಸಾಯುವ ಹಾಗಿದ್ದನು.3ಅವನು ಯೇಸುವಿನ ಸುದ್ಧಿಯನ್ನು ಕೇಳಿ ಆತನ ಬಳಿಗೆ ಬಂದು ನನ್ನ ಆಳನ್ನು ಸ್ವಸ್ಥಮಾಡಬೇಕೆಂದು ಆತನನ್ನು ಬೇಡಿಕೊಳ್ಳುವ ಹಾಗೆ ಯೆಹೂದ್ಯರ ಹಿರಿಯರನ್ನು ಕಳುಹಿಸಿದನು.4ಅವರು ಯೇಸುವಿನ ಬಳಿಗೆ ಬಂದು - ನಿನ್ನಿಂದ ಇಂಥ ಉಪಕಾರ ಹೊಂದುವದಕ್ಕೆ ಅವನು ಯೋಗ್ಯನು;5ಅವನು ನಮ್ಮ ಜನರನ್ನು ಪ್ರೀತಿಸಿ ಪ್ರಾರ್ಥನೆಗಾಗಿ ನಮಗೆ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿರುವನು ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು6ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಥಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ - ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ; ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನ್ನಲ್ಲಿಲ್ಲ.7ಈ ಕಾರಣದಿಂದ ನಾನು ನನ್ನನ್ನು ನಿಮ್ಮ ಬಳಿಗೆ ಬರುವುದಕ್ಕೆ ತಕ್ಕವನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.8ನಾನು ಸಹ ಮತ್ತೊಬ್ಬರ ಕೈ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ಹೋಗು ಎಂದು ಹೇಳಿದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ ಬಾ ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ ಇಂಥಿಂಥದನ್ನು ಮಾಡು ಎಂದು ಹೇಳಿದರೆ ಮಾಡುತ್ತಾನೆ ಎಂಬದಾಗಿ ಹೇಳಿಸಿದನು.9ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.10ತರುವಾಯ ಆ ಶತಾಥಿಪತಿಯ ಕಡೆಯಿಂದ ಬಂದವರು ತಿರಿಗಿ ಮನೆಗೆ ಹೋಗಿ ಆಳು ಆರೋಗ್ಯವಾಗಿರುವದನ್ನು ಕಂಡರು.ನಾಯಿನೆಂಬ ಊರಿನಲ್ಲಿ ಸತ್ತುಹೋಗಿದ್ದ ಒಬ್ಬ ಯೌನಸ್ಥನನ್ನು ಯೇಸು ಬದುಕಿಸಿದ್ದು
11ಸ್ವಲ್ಪಕಾಲದ ನಂತರ ಆತನು ನಾಯಿನೆಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರೂ, ಇನ್ನೂ ಅನೇಕರೂ ಹೋಗುತ್ತಿದ್ದರು.12ಆತನು ಊರು ಬಾಗಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಗ್ರಾಮಸ್ಥರು ಅನೇಕರಿದ್ದರು.13ಸ್ವಾಮಿಯು ಆಕೆಯನ್ನು ಕಂಡು ಕನಿಕರಿಸಿ -14ಅಳಬೇಡ ಎಂದು ಆಕೆಗೆ ಹೇಳಿ ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು - ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ ಅಂದನು.15ಅನ್ನುತ್ತಲೇ ಸತ್ತಿದ್ದವನು ಎದ್ದು ಕುಳಿತುಕೊಂಡು ಮಾತನಾಡುವದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.16ಎಲ್ಲರು ಭಯಹಿಡಿದವರಾಗಿ - ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ ಎಂದು ದೇವರನ್ನು ಕೊಂಡಾಡಿದರು.17ಈ ವಾರ್ತೆಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.ಸ್ನಾನಿಕನಾದ ಯೋಹಾನನು ಹೇಳಿಕಳುಹಿಸಿದ ಮಾತಿಗೆ ಯೇಸು ಉತ್ತರಕೊಟ್ಟದ್ದು
(ಮತ್ತಾ. 11:2-19)
18ಯೋಹಾನನ ಶಿಷ್ಯರು ನಡೆದ ಸಂಗತಿಗಳನ್ನೆಲ್ಲಾ ಆತನಿಗೆ ತಿಳಿಸಲು19ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ? ಎಂದು ಸ್ವಾಮಿಯನ್ನು ಕೇಳಲು ಹೇಳಿಕಳುಹಿಸಿದನು.20ಅವರು ಯೇಸುವಿನ ಬಳಿಗೆ ಬಂದು - ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ ಅಂದರು.21ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಉಪದ್ರವ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು; ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು.22ಹೀಗಿರಲು ಆತನು ಅವರಿಗೆ ಪ್ರತ್ಯುತ್ತರವಾಗಿ - ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರಿಗೆ ದೃಷ್ಟಿ ಬರುತ್ತವೆ, ಕುಂಟರಿಗೆ ಕಾಲುಬರುತ್ತವೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರಿಗೆ ಕಿವಿಕೇಳುತ್ತವೆ, ಸತ್ತವರು ಜೀವವನ್ನು ಹೊಂದುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.23ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು ಎಂದು ಹೇಳಿದನು.24ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ - ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?25ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.26ಹಾಗಾದರೆ ನೀವು ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದಿರಿ ಎಂದು ನಿಮಗೆ ಹೇಳುತ್ತೇನೆ.
27ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ.ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸರಾಗಮಾಡುವನು,
ಎಂದು ಯಾರ ವಿಷಯವಾಗಿ ಬರೆದದೆಯೋ ಆ ಪುರುಷನು ಅವನೇ.
28ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ; ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಹೇಳುತ್ತೇನೆ.29ಇದಲ್ಲದೆ ಜನರೆಲ್ಲರೂ ಸುಂಕದವರೂ ಯೋಹಾನನ ಉಪದೇಶವನ್ನು ಕೇಳಿದಾಗ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಂಡದ್ದರಲ್ಲಿ ದೇವರು ನೀತಿವಂತನೆಂದು ಒಪ್ಪಿಕೊಂಡರು.30ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ದೇವರ ಸಂಕಲ್ಪವನ್ನು ನಿರಾಕರಿಸಿದರು.31ಹೀಗಿರುವಲ್ಲಿ ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ?32ಪೇಟೆಯಲ್ಲಿ ಕೂಳಿತುಕೊಂಡು - ನಾವು ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ.33ಹೇಗಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು - ಅವನಿಗೆ ದೆವ್ವ ಹಿಡಿದದೆ ಅನ್ನುತ್ತೀರಿ.34ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ನೀವು - ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತೀರಿ.35ಆದರೆ ಜ್ಞಾನವಾದರೋ ತನ್ನ ಎಲ್ಲಾ ಮಕ್ಕಳಿಂದ ಸಮರ್ಥನೆ ಪಡೆದದೆ ಅಂದನು.ಯೇಸು ಒಬ್ಬ ಫರಿಸಾಯನ ಮನೆಯಲ್ಲಿ ಊಟಮಾಡುವಾಗ ದುರಾಚಾರಿಯಾದ ಒಬ್ಬ ಹೆಂಗಸು ಬಂದು ಆತನ ಪಾದಸೇವೆ ಮಾಡಿದ್ದು
36ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು.37ಆಗ ಆ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು38ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.39ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು - ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳುಕೊಳ್ಳುತ್ತಿದ್ದನು ಅಂದುಕೊಂಡನು.40ಅದಕ್ಕೆ ಯೇಸು - ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ ಅಂದಾಗ ಅವನು - ಬೋಧಕನೇ, ಹೇಳು ಅಂದನು.41ಆಗ ಯೇಸು - ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐನೂರು ಹಣ ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಹಣ ಕೊಡಬೇಕಾಗಿತ್ತು42ತೀರಿಸುವುದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಮನ್ನಾಮಾಡಿ ಬಿಟ್ಟನು. ಹಾಗಾದರೆ ಅವರಿಬ್ಬರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸುವನು ಎಂದು ಕೇಳಿದ್ದಕ್ಕೆ43ಸೀಮೋನನು - ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ ಅಂದನು. ಯೇಸು ಅವನಿಗೆ - ನೀನು ಸರಿಯಾಗಿ ತೀರ್ಪುಮಾಡಿದಿ ಎಂದು ಹೇಳಿ44ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ - ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು.45ನೀನು ನನಗೆ ಮುದ್ದಿಡಲಿಲ್ಲ; ಇವಳಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಕಾಲಿಗೆ ಮುದ್ದಿಡುವುದನ್ನು ಬಿಟ್ಟಿಲ್ಲ.46ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧ ತೈಲವನ್ನು ಕಾಲಿಗೆ ಹಚ್ಚಿದಳು.47ಹೀಗಿರಲು ನಾನು ಹೇಳುವ ಮಾತೇನಂದರೆ - ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ ಅಂದನು48ಆ ಮೇಲೆ ಆತನು ಅವಳಿಗೆ - ನಿನ್ನ ಪಾಪಗಳು ಕ್ಷಮಿಸಲ್ಪಟ್ಟವೆ ಎಂದು ಹೇಳಿದನು.49ಆತನ ಸಂಗಡ ಊಟಕ್ಕೆ ಕುಳಿತಿದ್ದವರೆಲ್ಲರೂ, ಪಾಪಗಳನ್ನು ಸಹ ಕ್ಷಮಿಸಲು ಇವನಾರು ಎಂದು ತಮ್ಮ ತಮ್ಮೊಳಗೆ ಅಂದುಕೊಂಡರು.50ಆದರೆ ಆತನು ಆ ಹೆಂಗಸಿಗೆ - ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ; ಸಮಾಧಾನದಿಂದ ಹೋಗು ಎಂದು ಹೇಳಿದನು. 8ಯೇಸು ಸುವಾರ್ತೆಯನ್ನು ಸಾರುತ್ತಾ ಸಂಚಾರಮಾಡುತ್ತಿದ್ದಾಗ ಭಕ್ತರಾದ ಸ್ತ್ರೀಯರು ಆತನ ಸೇವೆಮಾಡಿದ್ದು
1ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ2ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ - ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು,3ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದರು.ಬಿತ್ತುವವನ ಸಾಮ್ಯವೂ, ಅದರ ವಿವರವೂ, ದೀಪದ ದೃಷ್ಟಾಂತವು
(ಮತ್ತಾ. 13. 1-23; ಮಾರ್ಕ 4. 1-25)
4ಅನೇಕರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ -5ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.6ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು; ಅವು ಮೊಳೆತು ಬಂದರೂ ಬೇರೂರದ ಕಾರಣ ಒಣಗಿಹೋದವು.7ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು .8ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ನೂರರಷ್ಟು ಫಲವನ್ನು ಕೊಟ್ಟವು. ಈ ಮಾತುಗಳನ್ನು ಹೇಳಿ ಆತನು - ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ ಎಂದು ಹೇಳಿದನು.9ಯೇಸುವಿನ ಶಿಷ್ಯರು - ಈ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಿದಾಗ10ಆತನು - ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ ಸಾಮ್ಯರೂಪವಾಗಿ ಹೇಳಲಾಗುತ್ತದೆ.11ಈ ಸಾಮ್ಯದ ಅರ್ಥವೇನಂದರೆ - ಆ ಬೀಜವಂದರೆ ದೇವರ ವಾಕ್ಯ.12ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ; ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.13ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ; ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.14ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು; ಇವರೇ ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.15ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.16ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ; ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.17ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ. ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ.18ಆದ್ದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ; ಯಾಕೆಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವದು ಅಂದನು.ದೇವರ ಚಿತ್ತವನ್ನು ಅನುಸರಿಸುವವರೇ ತನ್ನ ಸಂಬಂಧಿಕರೆಂದು ಯೇಸು ಹೇಳಿದ್ದು
(ಮತ್ತಾ. 12. 46-50; ಮಾರ್ಕ 3. 31-35)
19ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.20ಜನರು ಆತನಿಗೆ - ನಿನ್ನ ತಾಯಿಯು ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ ಎಂದು ಹೇಳಿದಾಗ21ಆತನು ಅವರಿಗೆ - ಯಾರು ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುತ್ತಾರೋ ಅವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ ಎಂದು ಉತ್ತರಕೊಟ್ಟನು.ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ಶಾಂತಗೊಳಿಸಿದ್ದು
(ಮತ್ತಾ. 8. 18,23-27; ಮಾರ್ಕ 4. 35-41)
22ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಸಮುದ್ರದ ಆಚೇ ದಡಕ್ಕೆ ಹೋಗೋಣ ಎಂದು ಹೇಳಲು ಅವರು ದೋಣಿಯನ್ನು ಸಾಗಿಸಿ ಹೊರಟರು.23ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು; ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು.24ಹೀಗಿರಲಾಗಿ ಅವರು ಆತನ ಹತ್ತಿರ ಬಂದು - ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ ಅಲೆಗಳನ್ನು ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.25ತರುವಾಯ ಆತನು - ನಿಮ್ಮ ನಂಬಿಕೆ ಎಲ್ಲಿ? ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು - ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ; ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡು ಆಶ್ಚರ್ಯಪಟ್ಟರು.ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟವನನ್ನು ಕುರಿತದ್ದು
(ಮತ್ತಾ. 8. 24-34; ಮಾರ್ಕ 5. 1-20)
26ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಗಯನ್ನು ತಲುಪಿದರು.27ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.28ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ - ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.29ಯಾಕೆಂದರೆ - ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ಅರಣ್ಯಪ್ರದೇಶಗಳಿಗೆ ಓಡಿಸುತ್ತಿತ್ತು.30ಯೇಸುವು ಅವನಿಗೆ ನಿನ್ನ ಹೆಸರೇನೆಂದು ಕೇಳಲು ಅವನು - ನನ್ನ ಹೆಸರು ದಂಡು ಅಂದನು; ಯಾಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು.31ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.32ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು - ಆ ಹಂದಿಗಳೊಳಗೆ ಸೇರಿ ಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಆತನನ್ನು ಬೇಡಿಕೊಂಡವು.33ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಹಂದಿಗಳು ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸುರುಕಟ್ಟಿ ಸತ್ತು ಹೋದವು.34ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು35ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.36ನಡೆದ ಸಂಗತಿಯನ್ನು ನೋಡಿದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು37ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯಉಂಟಾಗಿ ಅವರು ಆತನನ್ನು - ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.38ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು. ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು - ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ39ಆತನು - ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.ಯೇಸು ಸತ್ತ ಹುಡುಗಿಯನ್ನು ಬದುಕಿಸಿದ್ದು; ಮತ್ತು ಒಬ್ಬ ಸ್ತ್ರೀಯ ರಕ್ತಕುಸುಮ ರೋಗವನ್ನು ವಾಸಿಮಾಡಿದ್ದು
(ಮತ್ತಾ. 9. 18-26; ಮಾರ್ಕ 5. 21-43)
40ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು41-42ಆಗ ಸಭಾಮಂದಿರದ ಅಧಿಕಾರಿಯಾದ ಯಾಯಿರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರುಷದವಳಾದ ಅವನ ಒಬ್ಬಳೇ ಮಗಳು ದೀನಾವಸ್ಥೆಯಲ್ಲಿದ್ದು ಸಾಯುವಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನರು ಗುಂಪುಗುಂಪಾಗಿ ಸೇರಿ ಆತನನ್ನು ನೂಕುತ್ತಿದ್ದರು.43ಆಗ ಹನ್ನೆರಡು ವರುಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು.44ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲ ವ್ಯಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು. ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ತ್ರವವಾಗುವುದು ನಿಂತಿತು.45ಆಗ ಯೇಸುವು - ನನ್ನನ್ನು ಮುಟ್ಟಿದವರಾರು ಎಂದು ಕೇಳಲು ಎಲ್ಲರೂ - ನಾನಲ್ಲ, ನಾನಲ್ಲ ಅನ್ನಲು ಪೇತ್ರನು - ಗುರುವೇ, ಎಷ್ಟೋ ಜನರು ನಿನ್ನನ್ನು ಒತ್ತಿಕೊಂಡು ಮೈಮೇಲೆ ನೂಕುತ್ತಿದ್ದಾರಲ್ಲಾ ಅಂದನು.46ಆದರೆ ಯೇಸುವು - ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬದು ನನಗೆ ಗೊತ್ತಾಯಿತು ಅಂದಾಗ47ಆ ಹೆಂಗಸು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಯೇಸುವಿಗೆ ಅಡ್ಡಬಿದ್ದು ತಾನು ಇಂಥ ಕಾರಣದಿಂದ ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂದೂ ಎಲ್ಲರ ಮುಂದೆ ತಿಳಿಸಿದಳು.48ಆತನು ಆಕೆಗೆ - ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು ಎಂದು ಹೇಳಿದನು.49ಆತನು ಇನ್ನೂ ಮಾತಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು - ನಿನ್ನ ಮಗಳು ಸತ್ತುಹೋದಳು; ಗುರುವಿಗೆ ತೊಂದರೆ ಕೊಡಬೇಡ ಅಂದನು.50ಆದರೆ ಯೇಸು ಅದನ್ನು ಕೇಳಿ ಅವನಿಗೆ - ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು ಎಂದು ಉತ್ತರಕೊಟ್ಟನು.51ತರುವಾಯ ಆತನು ಆ ಮನೆಗೆ ಹೋಗಿ ಪೇತ್ರ ಯೋಹಾನ ಯಾಕೋಬನು ಮತ್ತು ಆ ಹುಡುಗಿಯ ತಂದೆತಾಯಿಯರು ಇಷ್ಟು ಮಂದಿಯನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ.52ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡಿದುಕೊಳ್ಳುತ್ತಾ ಇದ್ದರು. ಯೇಸು - ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ ಅನ್ನಲೂ53ಜನರು ಆಕೆ ಸತ್ತಳೆಂದು ತಿಳಿದುಕೊಂಡಿದ್ದರಿಂದ ಆತನನ್ನು ಹಾಸ್ಯಮಾಡಿದರು.54ಆದರೆ ಆತನು ಆಕೆಯ ಕೈ ಹಿಡಿದು - ಮಗಳೇ, ಎದ್ದೇಳು ಎಂದು ಕೂಗಿ ಹೇಳಿದನು.55ಆಕೆಯ ಪ್ರಾಣ ತಿರಿಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು - ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆಕೊಟ್ಟನು.56ಆಕೆಯ ತಂದೆತಾಯಿಗಳು ಬೆರಗಾದರು. ಆತನು - ಈ ನಡೆದ ಸಂಗತಿಯನ್ನು ಯಾರಿಗೂ ತಿಳಿಸಬೇಡಿರೆಂದು ಖಂಡಿತವಾಗಿ ಹೇಳಿದನು.
9ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಸುವಾರ್ತೆ ಸಾರುವದಕ್ಕೆ ಕಳುಹಿಸಿದ್ದು
(ಮತ್ತಾ. 10. 1,5-14; ಮಾರ್ಕ 6. 7-13)
1ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು2ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವದಕ್ಕೂ ಅವರನ್ನು ಕಳುಹಿಸಿದನು.3ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ - ದಾರಿಗೆ ಏನನ್ನೂ ತೆಗೆದುಕೊಂಡುಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು.4ಇದಲ್ಲದೆ ನೀವು ಯಾವ ಮನೆಯಲ್ಲಿ ಇಳುಕೊಂಡಿರುವಿರೋ ಅಲ್ಲೇ ಉಳಿಯಿರಿ, ಅಲ್ಲಿಂದಲೇ ಹೊರಡಿರಿ.5ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವಗತಿಸದೆ ಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿ; ಅದು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರಲಿ ಅಂದನು.6ಆಗ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಗ್ರಾಮಗಳಲ್ಲೆಲ್ಲಾ ಸಂಚರಿಸಿದರು.ಅರಸನಾದ ಹೆರೋದನ ಯೇಸುವಿನ ಸುದ್ದಿಯನ್ನು ಕೇಳಿದ್ದು
(ಮತ್ತಾ. 14. 1-12; ಮಾರ್ಕ 6. 14-29)
7ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಪಡುವವನಾದನು. ಯಾಕೆಂದರೆ ಸತ್ತಿದ್ದ ಯೋಹಾನನು ತಿರಿಗಿ ಬದುಕಿಬಂದಿದ್ದಾನೆಂದು ಕೆಲವರೂ, ಎಲೀಯನು ಕಾಣಿಸಿಕೊಂಡನೆಂದು ಕೆಲವರೂ,8ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆಂದು ಇನ್ನು ಕೆಲವರೂ ಹೇಳಿಕೊಳ್ಳುತ್ತಿದ್ದರು.9ಆದರೆ ಹೆರೋದನು - ಯೋಹಾನನನ್ನು ನಾನೇ ಶಿರಚ್ಛೇಧನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು.ಯೇಸು ಐದು ಸಾವಿರ ಜನರಿಗೆ ಊಟಮಾಡಿಸಿದ್ದು
(ಮತ್ತಾ. 14. 13-21; ಮಾರ್ಕ 6. 30-44; ಯೋಹಾ. 6. 1-13)
10ಇತ್ತಲಾಗಿ ಶಿಷ್ಯರಾದ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಲು, ಆತನು ಅವರನ್ನು ಬೇತ್ಸಾಯಿದವೆಂಬ ಊರಿಗೆ ಕರೆದುಕೊಂಡುಹೋಗಿ ಅಲ್ಲಿಂದ ಅವರೊಂದಿಗೆ ಅಡವಿಗೆ ಹೋಗಲು,11ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತಾನಾಡಿ ಅವರಲ್ಲಿದ್ದ ರೋಗಿಗಳನ್ನು ಗುಣಪಡಿಸಿದನು.12ಹೊತ್ತು ಕಳೆಯೂತ್ತಾ ಬರಲು. ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು - ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಗಳಿಗೆ ಹೋಗಿ ಇಳಕೊಂಡು ಊಟಕ್ಕೆ ಬೇಕಾದ ಪದಾರ್ಥಗಳನ್ನು ವ್ಯವಸ್ಥೆ ಮಾಡಿಕೊಳ್ಳಲಿ; ನಾವು ಇಲ್ಲಿ ಅಡವಿಯಲ್ಲಿ ಇದ್ದೇವಲ್ಲಾ ಎಂದು ಆತನಿಗೆ ಹೇಳಲಾಗಿ13ಆತನು - ನೀವೇ ಅವರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕವರು - ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ; ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ? ಅಂದರು.14ಅಲ್ಲಿ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿಯಿದ್ದರು. ಆಗ ಯೇಸುವು ತನ್ನ ಶಿಷ್ಯರಿಗೆ - ಇವರನ್ನು ಒಂದೊಂದು ಪಂಕ್ತಿಗೆ ಹೆಚ್ಚುಕಡಿಮೆ ಐವತ್ತೈವತ್ತರಂತೆ ಕೂಡ್ರಿಸಿರಿ ಎಂದು ಹೇಳಲು15ಅವರು ಹಾಗೆಯೇ ಎಲ್ಲರನ್ನೂ ಕೂಡ್ರಿಸಿದರು.16ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಶಿಷ್ಯರ ಕೈಗೆ ಕೊಟ್ಟು - ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು.17ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು.ಪೇತ್ರನು ಯೇಸುವನ್ನು ಕ್ರಿಸ್ತನೆಂದು ಅರಿಕೆಮಾಡಿದ್ದು; ಯೇಸು ತನ್ನ ಮರಣವನ್ನು ಮುಂತಿಳಿಸಿದ್ದು
(ಮತ್ತಾ. 16. 13-28; ಮಾರ್ಕ 8. 27-9. 1)
18ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ ಎಂದು ಶಿಷ್ಯರನ್ನು ಕೇಳಲು ಅವರು -19ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ; ಕೆಲವರು ಎಲೀಯನು ಎಂದೂ; ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ ಎಂದು ಹೇಳಿದರು.20ಯೇಸು ಅವರನ್ನು - ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ ಎಂದು ಕೇಳಲಾಗಿ ಪೇತ್ರನು - ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು ಎಂದು ಉತ್ತರ ಕೊಟ್ಟನು.21ಆಗ ಯೇಸುವು - ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟು -22ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ ಎಂದು ಹೇಳಿದನು.23ಇದಲ್ಲದೆ ಅತನು ಎಲ್ಲರಿಗೂ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತು ಕೊಂಡು ನನ್ನ ಹಿಂದೆ ಪ್ರತಿದಿನ ಬರಲಿ.24ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.25ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?26ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.27ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲವೆಂದು ಹೇಳಿದನು.ಯೇಸು ಪ್ರಕಾಶರೂಪದಿಂದ ಕಾಣಿಸಿಕೊಂಡದ್ದು
(ಮತ್ತಾ. 17. 1-18; ಮಾರ್ಕ 9. 2-8)
28ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿವಸಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು.29ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು.30ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂತು. ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತನಾಡುತ್ತಿದ್ದರು! ಅವರು ಯಾರೆಂದರೆ ಮೋಶೆಯೂ ಎಲೀಯನೂ.31ಅವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇಮಿನಲ್ಲಿ ಆತನು ಹೊಂದಬೇಕಾಗಿದ್ದ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.32ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.33ಅವರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ - ಗುರುವೇ ನಾವು ಇಲ್ಲೇ ಇರುವುದು ಒಳ್ಳೆಯದು, ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಎಲೀಯನಿಗೊಂದು ಹಾಗೂ ಮೋಶೆಗೊಂದು ಎಂದು ಹೇಳಿದನು. ತಾನು ಏನು ಹೇಳುತ್ತಿದ್ದೇನೆನ್ನುವುದು ತನಗೇ ಗೊತ್ತಾಗಲಿಲ್ಲ.34ಅವನು ಇದನ್ನು ಹೇಳುತ್ತಿರುವಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಮೋಡವು ಅವರನ್ನು ಆವರಿಸಿಕೊಂಡಾಗ ಅವರು ಹೆದರಿದರು.35ಆಗ ಆ ಮೋಡದೊಳಗಿಂದ; “ಈತನು ನನ್ನ ಮಗನು. ನಾನು ಆರಿಸಿಕೊಂಡವನು; ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು.36ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.ಯೇಸು ಮೂರ್ಛೆ ರೋಗಿಯನ್ನು ಸ್ವಸ್ಥಮಾಡಿದ್ದು
(ಮತ್ತಾ. 17. 14-18; ಮಾರ್ಕ 9. 14-27)
37ಮರುದಿವಸ ಅವರು ಬೆಟ್ಟದಿಂದ ಇಳಿದು ಬಂದಾಗ ಜನರ ದೊಡ್ಡ ಗುಂಪೊಂದು ಆತನನ್ನು ಎದುರುಗೊಂಡರು.38ಆಗ ಆ ಗುಂಪಿನಲ್ಲಿದ್ದ ಒಬ್ಬನು - ಬೋಧಕನೇ, ನನ್ನ ಮಗನನ್ನು ಕಟಾಕ್ಷಿಸು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು. ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ.39ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ; ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಡುವುದಿಲ್ಲ.40ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರನ್ನು ಬೇಡಿಕೊಂಡೆನು. ಆದರೆ ಅವರಿಂದ ಆಗದೆಹೋಯಿತು ಎಂದು ಹೇಳಿದನು.41ಅದಕ್ಕೆ ಯೇಸು - ಎಲಾ ನಂಬಿಕೆಯಿಲ್ಲದಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ? ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.42ಆ ಹುಡುಗನು ಇನ್ನೂ ಬರುತ್ತಿರುವಾಗಲ್ಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಯ ಕೈಗೆ ಕೊಟ್ಟನು.43ಅದನ್ನು ನೋಡಿ ಎಲ್ಲರು ದೇವರ ಮಹತ್ಕಾರ್ಯಕ್ಕೆ ಬೆರಗಾದರು.ಯೇಸು ತನ್ನ ಮರಣವನ್ನು ಎರಡನೆಯ ಸಾರಿ ಮುಂತಿಳಿಸಿದ್ದು
(ಮತ್ತಾ. 17. 22,23; ಮಾರ್ಕ 9. 30-32)
ಯೇಸು ಮಾಡಿದ ಎಲ್ಲಾ ಮಹತ್ಕಾರ್ಯಗಳಿಗೆ ಎಲ್ಲರೂ ಆಶ್ಚರ್ಯಪಡುತ್ತಿರಲಾಗಿ ಆತನು ತನ್ನ ಶಿಷ್ಯರಿಗೆ -
44ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ; ಯಾಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.45ಅವರು ಈ ಮಾತನ್ನು ಗ್ರಹಿಸಲಿಲ್ಲ; ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.ಯೇಸು ತನ್ನ ಶಿಷ್ಯರಲ್ಲಿ ನಮ್ರತೆಯುಳ್ಳವನೇ ದೊಡ್ಡವನೆಂದು ತೋರಿಸಿದ್ದು
(ಮತ್ತಾ. 18. 1-5; ಮಾರ್ಕ 9. 33-37)
46ತರುವಾಯ ಶಿಷ್ಯರೊಳಗೆ - ತಮ್ಮಲ್ಲಿ ಯಾವನು ಹೆಚ್ಚಿನವನು ಎಂಬ ವಿಚಾರಹುಟ್ಟಿತು.47ಯೇಸು ಅವರ ಮನಸ್ಸಿನ ವಿಚಾರವನ್ನು ತಿಳಿದವನಾಗಿ, ಒಂದು ಚಿಕ್ಕಮಗುವನ್ನು ತನ್ನ ಪಕ್ಕದಲ್ಲಿ ನಿಲ್ಲಿಸಿ ಅವರಿಗೆ,48ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು; ಯಾಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು ಎಂದು ಹೇಳಿದನು.ಯೇಸುವಿನ ಶಿಷ್ಯರಿಗೆ ವಿರುದ್ಧವಲ್ಲದವರು ಅವರ ಪಕ್ಷದವರಾಗಿದ್ದಾರೆಂಬುವ ಬೋಧೆ
(ಮಾರ್ಕ 9. 38-40)
49ಅದಕ್ಕೆ ಯೋಹಾನನು - ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು ಅನ್ನಲು50ಯೇಸು ಅವನಿಗೆ - ಅಡ್ಡಿಮಾಡಬೇಡಿರಿ; ನಿಮಗೆ ವಿರುದ್ಧವಲ್ಲದವನು ನಿಮ್ಮ ಪಕ್ಷದವನೇ ಎಂದು ಹೇಳಿದನು.ಯೇಸು ಯೆರೂಸಲೇಮಿಗೆ ಹೋಗುವಾಗ ಆತನನ್ನು ಸಮಾರ್ಯದವರು ಸೇರಿಸಿಕೊಳ್ಳದೆ ಹೋದದ್ದು
51ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿವಸಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡು52ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು.53ಆದರೆ ಯೇಸುವು ಯೆರೂಸಲೇಮಿಗೆ ಹೋಗುವವನಾದ್ದರಿಂದ ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.54ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು - ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞೆಮಾಡ ಬಹುದಲ್ಲವೇ? ಎಂದು ಕೇಳಲು55ಯೇಸುವು ತಿರಿಗಿಕೊಂಡು ಅವರನ್ನು ಗದರಿಸಿ, ("ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು. ನರಪುತ್ರನು ಬಂದಿರುವುದು ಮಾನವ ಪ್ರಾಣಗಳನ್ನು ನಾಶಮಾದುವುದಕ್ಕಾಗಿ ಅಲ್ಲ ಅವರನ್ನು ರಕ್ಷಿಸುವುದಕ್ಕಾಗಿ ಬಂದನು")56ಅನಂತರ ಯೇಸು ಮತ್ತು ಶಿಷ್ಯರು ಹೊರಟು ಬೇರೆ ಹಳ್ಳಿಗೆ ಹೋದರು.ತನ್ನ ಶಿಷ್ಯರು ದೇವರ ಸೇವೆಗಿಂತ ಮೊದಲು ಬೇರೆ ಯಾವುದನ್ನೂ ಚಿಂತಿಸಕೂಡದೆಂದು ಯೇಸು ಬೋಧಿಸಿದ್ದು
(ಮತ್ತಾ. 8. 19-22)
57ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ - ನೀನು ಎಲ್ಲಿಗೇ ಹೋದರೂ ನಾನು ನಿನ್ನ ಹಿಂದೆ ಬರುತ್ತೇನೆ ಎಂದು ಹೇಳಲು ಆತನು ಅವನಿಗೆ - ನರಿಗಳಿಗೆ ಗುದ್ದುಗಳಿವೆ ,58ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.59ಯೇಸುವು ಮತ್ತೊಬ್ಬನಿಗೆ - ನನ್ನನ್ನು ಹಿಂಬಾಲಿಸು ಎಂದು ಹೇಳಲು ಅವನು - ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು ಅಂದನು.60ಆದರೆ ಯೇಸು ಅವನಿಗೆ - ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು ಎಂದು ಹೇಳಿದನು.61ಇನ್ನೊಬ್ಬನು ಸಹ - ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ; ಆದರೆ ಮೊದಲು ನನ್ನ ಮನೆಯವರಿಗೆ ಹೇಳಿ ಬರುವದಕ್ಕೆ ನನಗೆ ಅಪ್ಪಣೆಯಾಗಬೇಕು ಅಂದನು.62ಯೇಸು ಅವನಿಗೆ - ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲವೆಂದು ಹೇಳಿದನು.
10ಯೇಸು ಎಪ್ಪತ್ತು ಮಂದಿ ಶಿಷ್ಯರನ್ನು ಸುವಾರ್ತೆ ಸಾರುವುದಕ್ಕೆ ಕಳುಹಿಸಿದ್ದು; ಅವರು ಹಿಂತಿರುಗಿ ಬಂದು ತಾವು ಮಾಡಿದ್ದನ್ನು ತಿಳಿಸಿದ್ದು
(ಮತ್ತಾ. 9. 37, 38; 10. 7-16; 11. 25-27)
1ಇದಾದ ಮೇಲೆ ಯೇಸು ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯಯರನ್ನಾಗಿ ನೇಮಿಸಿ ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.2ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ - ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಯಜಮಾನನನ್ನು ಬೇಡಿಕೊಳ್ಳಿರಿ.3ಹೋಗಿರಿ; ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ.4ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ ಪ್ರವಾಸಕ್ಕೆ ಬೇಕಾಗುವದನ್ನಾಗಲಿ ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.5ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ - “ಈ ಮನೆಗೆ ಶುಭವಾಗಲಿ” ಎಂದು ಮೊದಲು ಹೇಳಿರಿ.6ಆಶೀರ್ವಾದ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಆಶಿರ್ವಾದವು ಅವನ ಮೇಲೆ ನಿಲ್ಲುವದು; ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವದು.7ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳುಕೊಳ್ಳಬೇಡಿರಿ.8ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.9ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ - ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ ಎಂದು ಹೇಳಿರಿ.10ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು -11“ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ಸಮಿಾಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ, ಎಂಬುದಾಗಿ ಹೇಳಿರಿ.12ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವದು ಎಂದು ನಿಮಗೆ ಹೇಳುತ್ತೇನೆ.13ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣೀತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕೂಳಿತುಕೊಂಡು ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.14ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವದು.15ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ.16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ; ನನ್ನನ್ನು ತಿರಸ್ಕರಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕರಮಾಡುವವನಾಗಿದ್ದಾನೆ ಅಂದನು.17ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು - ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ ಅಂದರು.18ಯೇಸು ಅವರಿಗೆ - ಸೈತಾನನು ಸಿಡಿಲಿನಂತೆ ಆಕಾಶದಿಂದ ಬೀಳುವದನ್ನು ಕಂಡೆನು.19ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಅವು ಯಾವದೂ ನಿಮಗೆ ಕೇಡು ಮಾಡುವದೇ ಇಲ್ಲ.20ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ ಎಂದು ಹೇಳಿದನು.21ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.22ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ; ತಂದೆ ಎಂಥವನೆಂದು ಮಗನ ಹೊರತು ಇನ್ಯಾರು ತಿಳಿದಿರುವುದಿಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ ಅಂದನು.23ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿ ಕೊಂಡು ಹೇಳಿದ್ದೇನೆಂದರೆ-ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು.24ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬದಾಗಿ ನಿಮಗೆ ಹೇಳುತ್ತೇನೆ ಅಂದನು.ಯೇಸು ಕರುಣೆಯುಳ್ಳ ಸಮಾರ್ಯದವನ ದೃಷ್ಟಾಂತವನ್ನು ಹೇಳಿದ್ದು
25ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ - ಬೋಧಕನೇ, ನಾನು ನಿತ್ಯಜೀವವನ್ನು ಬಧ್ಯಾನಾಗಲು ಏನು ಮಾಡಬೇಕು? ಎಂದು ಕೇಳಲು ಆತನು ಅವನಿಗೆ -26ಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ? ಎಂದು ಹೇಳಿದನು.27ಅದಕ್ಕೆ ಅವನು - ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ದಿಯಿಂದಲೂ ಪ್ರೀತಿಸಬೇಕು. ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂದು ಬರೆದದೆ ಅಂದನು.28ಆತನು ಅವನಿಗೆ - ನೀನು ಸರಿಯಾಗಿ ಉತ್ತರಕೊಟ್ಟಿರುವಿ; ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ, ಎಂದು ಹೇಳಿದನು.29ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವದಕ್ಕೆ ಅಪೇಕ್ಷಿಸಿ - ನನ್ನ ನೆರೆಯವನು ಯಾರು? ಎಂದು ಯೇಸುವನ್ನು ಕೇಳಲು30ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ - ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು ಗಾಯವಾಗುವಷ್ಟು ಹೊಡೆದು ಅವನನ್ನು ಅರ್ಧಜೀವಮಾಡಿ ಬಿಟ್ಟುಹೋದರು.31ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು.32ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು.33ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ34ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.35ಮರುದಿನ ಅವನು ಎರಡು ದಿನಾರಿಯಗಳನ್ನು ತೆಗೆದು ಛತ್ರದವನಿಗೆ ಕೊಟ್ಟು - ಇವನನ್ನು ಆರೈಕೆಮಾಡು; ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು ಅಂದನು.36ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು ಎಂದು ಕೇಳಿದ್ದಕ್ಕೆ37ಆ ಧರ್ಮೋಪದೇಶಕನು - ಅವನಿಗೆ ದಯೆ ತೋರಿಸಿದವನೇ ಅಂದನು. ಆಗ ಯೇಸು ಅವನಿಗೆ - ಹೋಗು, ನೀನೂ ಅದರಂತೆ ಮಾಡು ಎಂದು ಹೇಳಿದನು.ಮಾರ್ಥ ಮರಿಯಳು ಎಂಬುವರ ಮನೆಯಲ್ಲಿ ಯೇಸು ಇಳುಕೊಂಡದ್ದು
38ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು; ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.39ಅಕ್ಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.40ಅದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು - ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು ಅಂದಳು.41ಆದರೆ, ಯೇಸು ಸ್ವಾಮಿಯು ಆಕೆಗೆ - ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.42ಆದರೆ ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು.
11ಮನುಷ್ಯರು ದೇವರ ಪ್ರಾರ್ಥನೆಯಲ್ಲಿ ಆಸಕ್ತರಾಗಿರಬೇಕೆಂದು ಯೇಸುವು ಸಾಮ್ಯರೂಪವಾಗಿ ಬೋಧಿಸಿದ್ದು
(ಮತ್ತಾ. 6. 9-13; 7. 7-11)
1ಒಮ್ಮೆ ಯೇಸುವು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ - ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು ಎಂದು ಕೇಳಿದನು.2ಅದಕ್ಕಾತನು - ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ.
ನಿನ್ನ ರಾಜ್ಯವು ಬರಲಿ.
3ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು.
4ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು.ನಮ್ಮನ್ನು ಶೋಧನೆಯೊಳಗೆ ಸೇರದಂತೆ ಪಾರುಮಾಡು ಎಂದು ಹೇಳಿರಿ ಅಂದನು.
5ಪುನಃ ಅವರಿಗೆ ಹೇಳಿದ್ದೇನಂದರೆ - ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ: ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು.6ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು,7ಆ ಸ್ನೇಹಿತನು - ನನಗೆ ತೊಂದರೆ ಕೊಡಬೇಡ; ಈಗ ಬಾಗಿಲುಹಾಕಿದೆ; ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ; ನಾನು ಎದ್ದು ನಿನಗೆ ಕೊಡುವುದಕ್ಕಾಗುವದಿಲ್ಲ, ಎಂದು ಒಳಗಿನಿಂದ ಉತ್ತರಕೊಟ್ಟರೂ ಕೊಡಬಹುದು, ಅದು ಸಹಜ.8ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.9ಹಾಗೆಯೇ ನಾನು ನಿಮಗೆ ಹೇಳುವದೇನಂದರೆ - ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವದು;10ತಟ್ಟಿರಿ, ನಿಮಗೆ ತೆರೆಯುವುದು. ಯಾಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವದು, ತಟ್ಟುವವನಿಗೆ ತೆರೆಯುವುದು.11ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ?12ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ?13ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೇ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ ಅಂದನು.ಫರಿಸಾಯರು ಯೇಸುವನ್ನು ದೂಷಿಸಿ ಸೂಚಕಕಾರ್ಯವನ್ನು ನೋಡಬೇಕೆಂದು ಕೇಳಿಕೊಂಡಾಗ ಯೇಸು ಕೊಟ್ಟ ಉತ್ತರ
(ಮತ್ತಾ. 12. 22-45; ಮಾರ್ಕ 3. 22-30; 8. 11,12)
14ಒಮ್ಮೆ ಯೇಸುವು ಮೂಕದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು.15ಆದರೆ ಅವರಲ್ಲಿ ಕೆಲವರು - ಇವನು ದೆವ್ವಗಳ ಒಡೆಯನಾದ ಬೆಲ್ಜಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.16ಬೇರೆ ಕೆಲವರು ಆತನನ್ನು ಪರೀಕ್ಷಿಸುವದಕ್ಕಾಗಿ - ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿತೋರಿಸುವಂತೆ ಕೇಳಿದರು.17ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು ಅವರಿಗೆ ಹೇಳಿದ್ದೇನಂದರೆ - ತಮ್ಮತಮ್ಮೊಳಗೆ ಭೇದ ಹುಟ್ಟಿದ ರಾಜ್ಯವು ನಾಶವಾಗುವುದು; ಮತ್ತು ತನ್ನಲ್ಲಿ ಕಚ್ಚಾಡಿ ಭೇದಹುಟ್ಟಿಸುವ ಕುಟುಂಬ ಬಿದ್ದುಹೋಗುವುದು”18ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ,19ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.20ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ, ಎಂಬುದು ಸ್ಪಷ್ಟ.21ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು;22ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ.23“ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ; ನನ್ನ ಜೊತೆಯಲ್ಲಿ ಸೇರಿಸ ಪಡದವನು ಚದರಿಸುವವನಾಗುತ್ತಾನೆ”.24ಬೋದನೆಯನ್ನು ಮುಂದುವರಿಸುತ್ತಾ ಯೇಸುವು - ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ; ವಿಶ್ರಾಂತಿ ಸಿಕ್ಕದ ಕಾರಣ ಅದು - ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ ಅಂದುಕೊಂಡು ಬಂದು25ಆ ಮನೆ ಗುಡಿಸಿ ಅಲಂಕರಿಸಿದ್ದಾಗಿರುವದನ್ನು ಕಂಡು ಹೊರಟುಹೋಗಿ26ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರಕೊಂಡು ಬರುವದು; ಅವು ಒಳಹೊಕ್ಕು ಅಲ್ಲಿ ವಾಸಮಾಡುವವು; ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು ಅಂದನು.27ಯೇಸುವು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು - ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಕೂಗಿದಳು.28ಅದಕ್ಕೆ ಯೇಸು, ಹಾಗನ್ನ ಬೇಡ, “ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು,” ಅಂದನು.29ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸುವು ಹೇಳುವದಕ್ಕೆ ತೊಡಗಿದ್ದೇನಂದರೆ - ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಈ ಸಂತತಿ ಸಿಕ್ಕುವುದಿಲ್ಲ.30ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು.31ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಮೆಲಾದವನಿದ್ದಾನೆ.32ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಹೇಳುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ದೇವರ ಕಡೆಗೆ ತಿರುಗಿಕೊಂಡರು; ಆದರೆ ಇಲ್ಲಿ ಯೋನನಿಗಿಂತಲೂ ಮೆಲಾದವನು ಇಲ್ಲಿದ್ದಾನೆ" ಎಂದು ಹೇಳಿದನು.33ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.34ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ; ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವದು.35ಆದದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು.36ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಒಂದು ಭಾಗದಲ್ಲಿಯೂ ಕತ್ತಲಿಲ್ಲದ್ದಾಗಿದ್ದರೆ ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಕಾಲದಲ್ಲಿ ಹೇಗೋ ಹಾಗೆಯೇ ಅದು ಪೂರ್ಣವಾಗಿ ಬೆಳಕಾಗಿರುವದು ಅಂದನು.ಯೇಸು ಫರಿಸಾಯರ ದುರ್ಗುಣಗಳನ್ನು ಖಂಡಿಸಿದ್ದು
(ಮತ್ತಾ. 23. 1-36)
37ಯೇಸು ಮಾತಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕೂಳಿತುಕೊಂಡನು.38ಆತನು ಕೈತೊಳೆಯದೆ ಊಟಕ್ಕೆ ಕೂಳಿತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು.39ಆದರೆ ಸ್ವಾಮಿಯು ಅವನಿಗೆ - ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.40ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ.41ಹೇಗೂ ಒಳಗಿರುವಂಥದನ್ನು ದಾನಕೊಡಿರಿ; ಆಗ ಸಕಲವೂ ನಿಮಗೆ ಶುದ್ಧವಾಗಿರುವದು.42ಅಯ್ಯೋ ಫರಿಸಾಯರೇ, ನೀವು ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೋಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ; ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ; ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು.43ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ.44ನಿಮ್ಮ ಗತಿಯನ್ನು ಏನು ಹೇಳಲಿ; ನೆಲಸಮವಾದ ಸಮಾಧಿಗಳ ಹಾಗಿದ್ದೀರಿ; ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು ಎಂದು ಹೇಳಿದನು.45ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ - ಬೋಧಕನೇ, ಈ ಮಾತುಗಳನ್ನು ಹೇಳುವದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು ಎಂದು ಹೇಳಲು46ಆತನು - ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ; ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ.47ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾಧಿಗಳ ಗೋರಿಗಳನ್ನು ಕಟ್ಟುತ್ತೀರಿ; ಅವರನ್ನು ಕೊಂದವರು ನಿಮ್ಮ ಪಿತೃಗಳೇ.48ಹೀಗಿರುವದರಿಂದ ನಿಮ್ಮ ಪಿತೃಗಳು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.49ಆದ್ದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು.50-51ಹೀಗೆ ಲೋಕದ ಆದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆವಿಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.52ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನ ಮಂದಿರದ ಬೀಗದ ಕೈಯನ್ನು ನಿಮ್ಮಲೇ ಇಟ್ಟುಕೊಂಡಿದ್ದಿರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ; ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ ಅಂದನು.53ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ54ಆತನ ಬಾಯಿಮಾತಿನಲ್ಲಿ ಏನಾದರೂ ತಪ್ಪು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.
12ಫರಿಸಾಯರ ಉಪದೇಶಕ್ಕೆ ಎಚ್ಚರಿಕೆಯಾಗಿರಬೇಕೆಂದು ಯೇಸು ಭೋಧಿಸಿದ್ದು
(ಮತ್ತಾ. 10. 26-33)
1ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸುವು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.”2ಮರೆಯಾಗಿರುವ ಯಾವದೂ ವ್ಯಕ್ತವಾಗದೆ ಇರುವುದಿಲ್ಲ. ಪ್ರಕಟಗೊಳ್ಳದ ರಹಸ್ಯವೂ ಇಲ್ಲ.3ಹೀಗಿರುವದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವದು. ಮತ್ತು ನೀವು ಕೊಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವದು.4ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ - ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.5ಆದರೆ ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ದಬ್ಬಲು ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.6ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ.7ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.ಬಹಿರಂಗವಾಗಿ ಕ್ರಿಸ್ತನ ಸಾಕ್ಷಿಯಾಗಿ ಜೀವಿಸುವುದು
(ಮತ್ತಾ. 10. 32-33, 12. 32, 10. 19-20)
8ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು,9ಆದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು.10ಮನುಷ್ಯಕುಮಾರನ ವಿರುದ್ಧ ಮಾತಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮೆಯೇ ದೊರಕದು.11ಅವರು ನಿಮ್ಮನ್ನು ಪ್ರಾರ್ಥನ ಮಂದಿರಗಳಿಗೂ ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ ಅಧಿಪತಿಗಳ ಎದುರಿಗೂ ಹಿಡುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ.12ಯಾಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು ಅಂದನು.ಬುದ್ಧಿಯಿಲ್ಲದ ಐಶ್ವಯ೯ವಂತನ ಸಾಮ್ಯ
13ಆಗ ಜನರಲ್ಲಿ ಒಬ್ಬನು - ಭೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು ಎಂದು ಯೇಸುವನ್ನು ಕೇಳಿಕೊಳ್ಳಲು14ಆತನು - ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು ಎಂದು ಅವನನ್ನು ಕೇಳಿ,15ಜನರಿಗೆ – ಎಲ್ಲಾ ದುರಾಸೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವದಿಲ್ಲ ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು.16ಅದೇನಂದರೆ ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು.17ಆಗ ಅವನು ತನ್ನೊಳಗೆ - ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲವಲ್ಲಾ ಎಂದು ಆಲೋಚಿಸಿ - ಒಂದು ಕೆಲಸ ಮಾಡುತ್ತೇನೆ.18ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನುಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ಧವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು.19ನನ್ನ ಜೀವಾತ್ಮಕ್ಕೆ - ಜೀವವೇ, ಅನೇಕ ವರುಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ; ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು ಅಂದುಕೊಂಡನು.20ಆದರೆ ದೇವರು ಅವನಿಗೆ - ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.21ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವಯ೯ವಂತನಾಗದೆ ಇರುವವನು ಅವನಂತಯೇ ಇದ್ದಾನೆ ಅಂದನು.ಇಹಲೋಕದ ಚಿಂತೆಯ ವಿಷಯವಾಗಿಯೂ ಎಚ್ಚರಿಸಿದ್ದು
(ಮತ್ತಾ. 6:25-33)
22ಇದಲ್ಲದೆ ಯೇಸುವು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ.23ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು.24ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಅದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.25ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳದಷ್ಟು ಉದ್ದವಾದರೂ ಎಳೆದು ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?26ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವದೇಕೆ?27ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ.28ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.29ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.30ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.31ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವದು.32ಚಿಕ್ಕ ಹಿಂಡೇ, ಹೇದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.33ನಿಮಗಿರುವದನ್ನು ಮಾರಿಬಿಟ್ಟು ದಾನಾಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.34ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುವದಷ್ಟೇ.ತನ್ನ ಶಿಷ್ಯರು ಯಾವಾಗಲೂ ಎಚ್ಚರವಾಗಿರಬೇಕೆಂಬದಾಗಿ ಯೇಸು ಎರಡು ಸಾಮ್ಯಗಳನ್ನು ಹೇಳಿದ್ದು
(ಮತ್ತಾ. 24:42-51)
35ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ.36ನೀವಂತೂ ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವ ದಾಸರಂತೆ ಇರಿ.37ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕೂರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.38ಯಜಮಾನನು ಬರುವಾಗ ನಡು ರಾತ್ರಿಆಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಸೇವಕರು ಧನ್ಯರು.39ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳುಕೊಳ್ಳಿರಿ.40ನೀವು ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಅಂದನು.41ಆಗ ಪೇತ್ರನು - ಸ್ವಾಮಿ, ನೀನು ಈ ಸಾಮ್ಯವು ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ? ಎಂದು ಕೇಳಲು.42ಯೇಸು ಸ್ವಾಮಿಯು ಹೇಳಿದ್ದೇನಂದರೆ - ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಮನೆಯವರ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮನೆವಾರ್ತೆಯವನು ಯಾರು?43ಯಜಮಾನನು ಬಂದು ಯಾವ ಆಳು ಹೀಗೆ ಮಾಡುವದನ್ನು ಕಾಣುವನೋ ಆ ಆಳು ಧನ್ಯನು.44ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.45ಆದರೆ ಆ ಆಳು - ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,46ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು.47ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.48ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.ಯೇಸುವನ್ನು ಅನುಸರಿಸುವವರಿಗೆ ಸಂಬಂಧಿಕರ ವಿರೋಧವಿರುವದೆಂತಲೂ, ನೂತನ ಕಾಲದ ಸೂಚನೆಗಳನ್ನು ಗುರುತಿಸಿಕೊಳ್ಳಬೇಕೆಂತಲೂ ಬೋಧನೆ
(ಮತ್ತಾ. 10:34–36; 16; 1-3)
49ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ.50ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.51ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇಧಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.52ಹೇಗೆಂದರೆ - ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು.53ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇಧವುಳ್ಳವರಾಗಿ ವಿಂಗಡಿಸಿ ಹೋಗುವರು, ಅಂದನು.54ಇದಲ್ಲದೆ ಯೇಸುವು ಎಲ್ಲಜನರಿಗೂ ಹೇಳಿದ್ದೇನಂದರೆ - ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ; ಹಾಗೆಯೇ ಆಗುತ್ತದೆ.55ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ.56ಕಪಟಿಗಳೆ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ; ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆಹೊಗಿದ್ದಿರಾ?57ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವದಿಲ್ಲ?58ನೀನು ವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು.59ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ, ಅಂದನು.
13ಮನುಷ್ಯರು ದೇವರ ಕಡೆಗೆ ತಿರುಗದಿದ್ದರೆ ನಾಶವಾಗುತ್ತಾರೆಂದು ಭೋಧಿಸುವದಕ್ಕಾಗಿ ಯೇಸು ಫಲಕೊಡದ ಅಂಜೂರ ಮರದ ಸಾಮ್ಯವನ್ನು ಹೇಳಿದ್ದು
1ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು - ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.2ಅದಕ್ಕೆ ಆತನು ಅವರಿಗೆ ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ?3ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಹಾಗೆಯೇ ಹಾಳಾಗಿ ಹೋಗುವಿರಿ.4ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?5ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ಹಾಳಾಗಿ ಹೋಗುವಿರಿ ಎಂದು ಹೇಳಿದನು.6ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನಂದರೆ - ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.7ಬಳಿಕ ಅವನು ತೋಟಗಾರನಿಗೆ - ನೋಡು, ನಾನು ಮೂರು ವರುಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು ಎಂದು ಹೇಳಿದನು.8ಆದಕ್ಕೆ ಆ ತೋಟಗಾರನು - ಯಜಮಾನನೇ ಈ ವರುಷವೂ ಇದನ್ನು ಬಿಡು, ಅಷ್ಟರಲ್ಲಿ ನಾನು ಇದರ ಸುತ್ತಲು ಅಗಿದು ಗೊಬ್ಬರ ಹಾಕುತ್ತೇನೆ.9ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು ಎಂದು ಉತ್ತರ ಕೊಟ್ಟನು.ಯೇಸು ಸಬ್ಬತ್ ದಿನದಲ್ಲಿ ಒಬ್ಬ ಸ್ತ್ರೀಯನ್ನು ಸ್ವಸ್ಥಮಾಡಿದ್ದು
10ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು.11ಅಲ್ಲಿ ಹದಿನೆಂಟು ವರುಷಗಳಿಂದ ದುರಾತ್ಮನಿಂದ ಭಾದಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಣ್ಣುಮಗಳು ಇದ್ದಳು.12ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ - ನಿನ್ನ ರೋಗವು ಬಿಡುಗಡೆಯಾಯಿತು ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು;13ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು14ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ - ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿವಸಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ ಎಂದು ಹೇಳಿದನು.15ಆ ಮಾತನ್ನು ಕೇಳಿ ಸ್ವಾಮಿಯು ಅವನಿಗೆ - ಕಪಟಿಗಳು ನೀವು, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವದಕ್ಕಾಗಿ ಹಿಡುಕೊಂಡು ಹೋಗುತ್ತಾನಲ್ಲವೇ.16ಹಾಗಾದರೆ ಹದಿನ್ನೆಂಟು ವರುಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ ಎಂದು ಉತ್ತರ ಕೊಟ್ಟನು.17ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.ದೇವರ ರಾಜ್ಯವು ಸಾಸಿವೆಕಾಳಿಗೂ ಹುಳಿಹಿಟ್ಟಿಗೂ ಸಮಾನವಾಗಿದೆ ಎಂಬ ಭೋಧನೆ
(ಮತ್ತಾ. 13. 31-33, ಮಾರ್ಕ 4. 30–32)
18ಯೇಸು ಹೇಳಿದ್ದೇನಂದರೆ - ದೇವರ ರಾಜ್ಯವು ಯಾವುದಕ್ಕೆ ಹೋಲಿಕೆಯಾಗಿದೆ?19ಅದನ್ನು ನಾನು ಯಾವುದಕ್ಕೆ ಹೋಲಿಸಲಿ? ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.20ಆತನು ಇನ್ನೂ ಹೇಳಿದ್ದೇನಂದರೆ - ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ? ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ.21ಅದನ್ನು ಒಬ್ಬಳು ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು ಅಂದನು.ಇಕ್ಕಟ್ಟಾದ ಬಾಗಿಲಲ್ಲಿ ಪ್ರವೇಶಿಸಿರಿ ಎಂಬುವ ಭೋಧನೆ
(ಮತ್ತಾ. 7. 13,14, 8. 11, 12)
22ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು.23ಆಗ ಒಬ್ಬನು - ಸ್ವಾಮಿ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು,24ಆತನು ಅವರಿಗೆ - ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.25ಮನೆ ಯಜಮಾನನು ಎದ್ದು ಬಾಗಿಲು ಹಾಕಿಕೊಂಡ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ - ಕರ್ತನೇ ನಮಗೆ ಬಾಗಿಲು ತೆರೆಯಿರಿ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು - ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ ಅಂದಾನು26ಅದಕ್ಕೆ ನೀವು - ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ ಎಂದು ಹೇಳುವದಕ್ಕೆ ತೊಡಗುವಿರಿ.27ಆದರೆ ಅವನು - ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ ಎಂದು ನಿಮಗೆ ಹೇಳುತ್ತೇನೆ ಅನ್ನುವನು.28ಅಬ್ರಹಾಮ, ಇಸಾಕ, ಯಾಕೋಬ ಇವರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವದನ್ನೂ; ನಿಮ್ಮನ್ನು ಮಾತ್ರ ಹೊರಗೆ ಹಾಕುವುದನ್ನು ನೀವು ನೋಡುವಾಗ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.29ಇದಲ್ಲದೆ ಪೂರ್ವ ಪಶ್ಛಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಊಟಕ್ಕೆ ಕುಳಿತುಕೊಳ್ಳುವರು.30ಇಗೋ ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು. ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು ಅಂದನು.ಯೇಸು ಉಪರಾಜನಾದ ಹೆರೋದನನ್ನು ಕುರಿತು ಹೇಳಿದ್ದು. ಯರೂಸಲೇಮಿನ ವಿಷಯದಲ್ಲಿ ದುಃಖಪಟ್ಟಿದ್ದು
(ಮತ್ತಾ 23. 37 – 39)
31ಅದೇ ಗಳಿಗೆಯಲ್ಲಿ ಕೆಲವು ಮಂದಿ ಪರಿಸಾಯರು ಹತ್ತಿರ ಬಂದು ಯೇಸುವಿಗೆ - ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ ಎಂದು ಹೇಳಲು,32ಆತನು ಅವರಿಗೆ - ನೀವು ಹೋಗಿ ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಗಳನ್ನು ವಾಸಿಮಾಡುತ್ತಾ ಇದ್ದು ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ ಎಂದು ಆ ನರಿಗೆ ಹೇಳಿರಿ ಅಂದನು.33ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.34ಯೆರೂಸಲೇಮೇ; ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.35ನೋಡಿರಿ, ನಿಮ್ಮ ದೇವಾಲಯ ಪಾಳುಬೀಳುವುದು. ‘ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ’ ಎಂದು ನೀವು ಹೇಳುವ ವರೆಗೂ ನೀವು ನನ್ನನ್ನು ನೋಡುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ.
14ಒಬ್ಬ ಮುಖ್ಯಸ್ಥನ ಮನೆಯಲ್ಲಿ ಯೇಸು ಊಟಕ್ಕೆ ಕೂತಿದ್ದಾಗ ಕರಿಸಿಕೊಂಡವರಿಗೂ ಕರೆದವನಿಗೂ ಆತನು ಸಾಮ್ಯರೂಪವಾಗಿ ಉಪದೇಶಮಾಡಿದ್ದು
(ಮತ್ತಾ. 22. 2-10 ನೋಡಿರಿ)
1ಆತನು ಸಬ್ಬತ್‍ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದರು.2ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವದನ್ನು ನೋಡಿ -3ಸಬ್ಬತ್‍ದಿನದಲ್ಲಿ ಸ್ವಸ್ಥಮಾಡುವದು ಸರಿಯೋ? ಸರಿಯಲ್ಲವೋ ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.4ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ -5ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್‍ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ ಎಂದು ಅವರನ್ನು ಕೇಳಿದನು.6ಅವರು ಅದಕ್ಕೆ ಉತ್ತರಕೊಡಲಾರದೆ ಇದ್ದರು.7ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮೊದಲನೆಯ ಸ್ಥಾನವನ್ನು ಆರಿಸಿಕೊಳ್ಳುವದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು, ಏನಂದರೆ -8ಯಾವನಾದರೂ ನಿಮ್ಮನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮೊದಲನೆಯ ಸ್ಥಾನದಲ್ಲಿ ಕೂತುಕೊಳ್ಳಬೇಡ; ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು,9ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು - ಇವನಿಗೆ ಸ್ಥಳ ಬಿಡು ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯಸ್ಥಾನದಲ್ಲಿ ಕೂತುಕೊಳ್ಳುವದಕ್ಕೆ ಹೋಗುವಿ.10ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕೂತುಕೋ; ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ - ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೂರಕುವುದು.11ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.12ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನಂದರೆ - ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ ನಿನ್ನ ಅಣ್ಣತಮ್ಮಂದಿರನ್ನಾಗಲಿ ನಿನ್ನ ಬಂಧುಬಾಂಧವರನ್ನಾಗಲಿ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವದು.13ಅದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ;14ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಜೀವಿತರಾಗಿ ಪುನರುತ್ತಾನ ಹೊಂದುವಾಗ ದೇವರೆ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು.15ಊಟಕ್ಕೆ ಕೂಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ - ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು ಎಂದು ಹೇಳಲು16ಯೇಸು ಅವನಿಗೆ ಹೇಳಿದ್ದೇನಂದರೆ - ಒಬ್ಬ ಮನುಷ್ಯನು ಬಹಳವಾಗಿ ಅಡಿಗೆಮಾಡಿಸಿ ಅನೇಕರಿಗೆ ಊಟಕ್ಕೆ ಆಮಂತ್ರಿಸಿದನು.17ಆ ಮೇಲೆ ಊಟದ ಹೊತ್ತಿಗೆ ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು - ಈಗ ಎಲ್ಲವೂ ಸಿದ್ಧವಾಗಿದೆ ಉಟಕ್ಕೆ ಬರಬೇಕು ಎಂದು ಕರೆಯುವದಕ್ಕೆ ತನ್ನ ಆಳನ್ನು ಕಳುಹಿಸಿದನು.18ಆದರೆ ಅವರೆಲ್ಲರೂ ಕ್ಷಮಿಸಬೇಕೆಂದು ಒಂದೇ ಮನಸ್ಸಿನಿಂದ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡುವ ಅಗತ್ಯವಿದೆ, ನನ್ನನ್ನು ಕ್ಷಮಿಸಬೇಕೆಂದು ಕೇಳಿಕೊಂಡೆನೆಂಬದಾಗಿ ಹೇಳು ಅಂದನು.19ಮತ್ತೊಬ್ಬನು - ನಾನು ಐದು ಜೋಡಿ ಎತ್ತುಗಳನ್ನು ಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕೆಂದು ಕೇಳಿಕೊಂಡೆನೆಂಬದಾಗಿ ಹೇಳು ಅಂದನು.20ಇನ್ನೊಬ್ಬನು - ನಾನು ಮದುವೆಮಾಡಿಕೊಂಡಿದ್ದೇನೆ, ಆದ್ದರಿಂದ ನಾನು ಬರುವುದಕ್ಕಾಗುವುದಿಲ್ಲ ಅಂದನು.21ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ - ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರಕೊಂಡು ಬಾ ಎಂದು ಹೇಳಿದನು.22ಬಳಿಕ ಆ ಆಳು - ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು; ಆದರೂ ಇನ್ನೂ ಸ್ಥಳ ಉಳಿದಿದೆ ಅಂದನು.23ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೆನೆಂದರೆ - ನೀನು ಹಾದಿಗಳಿಗೂ ಬೇಲಿಗಳ ಬಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರಕೊಂಡು ಬಾ, ನನ್ನ ಮನೆ ತುಂಬಲಿ.24ಆದರೆ ಊಟಕ್ಕೆ ಹೇಳಿಸಿಕೊಂಡವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ಸವಿಯನ್ನು ನೋಡಬಾರದು ಎಂದು ನಿಮಗೆ ಹೇಳುತ್ತೇನೆ ಅಂದನು.ಯೇಸು ತನ್ನನ್ನು ಅನುಸರಿಸುವವರು ತಕ್ಕ ಆಲೋಚನೆ ಮಾಡಿಕೊಂಡು ಬರಬೇಕೆಂದು ಸಾಮ್ಯರೂಪವಾಗಿ ಉಪದೇಶಿಸಿದ್ದು
(ಮತ್ತಾ. 10. 37-39)
25ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ -26ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ-ತಾಯಿ, ಹೆಂಡತಿ, ಮಕ್ಕಳು, ಅಣ್ಣ ತಮ್ಮಂದಿರು, ಅಕ್ಕ ತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.27ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬಂದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.28ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕೂಳಿತುಕೊಂಡು - ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವದಿಲ್ಲವೇ?29ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು -30ಈ ಮನುಷ್ಯನು ಕಟ್ಟಿಸುವದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು ಎಂದು ಅವನನ್ನು ಹಾಸ್ಯಮಾಡಾರು.31ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕೂಳಿತುಕೊಂಡು ಆಲೋಚಿಸುವದಿಲ್ಲವೇ?32ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು.33ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.34ಉಪ್ಪಂತೂ ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ?35ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ; ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಅಂದನು.
15ದೇವರ ಕಡೆಗೆ ತಿರುಗಿದ ಪಾಪಿಯ ವಿಷಯದಲ್ಲಿ ಪರಲೋಕದಲ್ಲಿ ಆಗುವ ಸಂತೋಷವನ್ನು ಸೂಚಿಸುವ ಮೂರು ದೃಷ್ಟಾಂತಗಳು
(ಮತ್ತಾ. 18. 12-14)
1ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಾ ಇರಲು2ಫರಿಸಾಯರೂ ಶಾಸ್ತ್ರಿಗಳೂ - ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ ಎಂದು ಹೇಳಿಕೊಂಡು ಗುಣುಗುಟ್ಟುತ್ತಿದ್ದರು.3ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.4ಅದೇನಂದರೆ - ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಭತ್ತೊಂಭತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ?5ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು6ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ - ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ ಎಂದು ಅವರಿಗೆ ಹೇಳುವನಲ್ಲವೇ.7ಅದರಂತೆ ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ.8ಯಾವ ಹೆಂಗಸು ತನ್ನಲ್ಲಿ ಹತ್ತು ಪಾವಲಿಗಳಿರಲಾಗಿ ಒಂದು ಪಾವಲಿ ಕಳೆದು ಹೋದರೆ ದೀಪಹಚ್ಚಿ ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ?9ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು - ಕಳೆದು ಹೋಗಿದ್ದ ಪಾವಲಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ ಎಂದು ಹೇಳುವಳಲ್ಲವೇ.10ಅದರಂತೆ ಒಬ್ಬ ಪಾಪಿಯು ದೇವರ ಕಡೆಗೆ ತಿರುಗಿಕೊಳ್ಳುವ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವದೆಂದು ನಿಮಗೆ ಹೇಳುತ್ತೇನೆ ಅಂದನು.11ಇನ್ನೂ ಆತನು ಹೇಳಿದ್ದೇನಂದರೆ - ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು.12ಅವರಲ್ಲಿ ಕಿರಿಯವನು ತಂದೆಗೆ - ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು.13ಸ್ವಲ್ಪ ದಿವಸದ ಮೇಲೆ ಆ ಕಿರೀಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು.14ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು.15ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸುವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.16ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಶೆಪಟ್ಟನು; ಆದರೂ ಯಾರೂ ಅವನಿಗೆ ಕೊಡಲಿಲ್ಲ.17ಆಗ ಅವನಿಗೆ ಬುದ್ಧಿಬಂದು ಅವನು - ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.18ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ;19ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಎಂದು ಹೇಳುವೆನು ಅಂದುಕೊಂಡು ಎದ್ದು ತನ್ನ ತಂದೆಯ ಕಡೆಗೆ ಬಂದನು.20ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಬಹಳವಾಗಿ ಮುದ್ದಿಟ್ಟನು.21ಆದರೂ ಮಗನು ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿ ಕೊಳ್ಳುವದಕ್ಕೆ ಯೋಗ್ಯನಲ್ಲ - ಎಂದು ಹೇಳಲು22ತಂದೆಯು ತನ್ನ ಆಳುಗಳಿಗೆ - ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ತೊಡಿಸಿ; ಇವನ ಕೈಗೆ ಉಂಗುರವನ್ನು ಹಾಕಿರಿ; ಕಾಲಿಗೆ ಜೋಡು ಹಾಕಿರಿ;23ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ; ಹಬ್ಬಮಾಡೋಣ, ಉಲ್ಲಾಸಪಡೋಣ.24ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿ ಸಂತೋಷಿಸುವುದಕ್ಕೂ ಉಲ್ಲಾಸಪಡುವದಕ್ಕೂ ತೊಡಗಿದರು.25ಆದರೆ ಅವನ ಹಿರೀಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ26ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು - ಇದೇನು ಎಂದು ವಿಚಾರಿಸಿದನು.27ಆಳು ಅವನಿಗೆ - ನಿನ್ನ ತಮ್ಮ ಬಂದಿದ್ದಾನೆ; ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿಸಿದ ಕರುವನ್ನು ಕೊಯ್ಸಿದ್ದಾನೆ ಎಂದು ಹೇಳಿದನು.28ಇದನ್ನು ಕೇಳಿ ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.29ಆದರೆ ಅವನು ತನ್ನ ತಂದೆಗೆ - ನೋಡು, ಇಷ್ಟು ವರುಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಒಂದಪ್ಪಣೆಯನ್ನಾದರೂ ಎಂದೂ ಮಿಾರಲಿಲ್ಲ; ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.30ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿಸಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ ಎಂದು ಉತ್ತರಕೊಟ್ಟನು.31ಅದಕ್ಕೆ ತಂದೆಯು - ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ಮತ್ತು ನನ್ನದೆಲ್ಲಾ ನಿನ್ನದೇ.32ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.
16ಭವಿಷ್ಯತ್ತಿಗಾಗಿ ಕೂಡಿಟ್ಟುಕೊಂಡ ಕಳ್ಳನಾದ ಮನೆವಾರ್ತೆಯವನ ಸಾಮ್ಯ
1ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ - ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಮನೆವಾರ್ತೆಯವನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ - ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ,2ಯಜಮಾನನು ಅವನನ್ನು ಕರೆದು - ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಮನೆವಾರ್ತೆಯ ಲೆಕ್ಕವನ್ನು ಒಪ್ಪಿಸು; ನೀನು ಇನ್ನು ಮನೆವಾರ್ತೆಯವನಾಗಿರುವದಕ್ಕೆ ಯೋಗ್ಯನಲ್ಲ ಎಂದು ಹೇಳಿದನು.3ಹೀಗಿರಲಾಗಿ ಆ ಮನೆವಾರ್ತೆಯವನು - ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಮನೆವಾರ್ತೆಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ; ಭಿಕ್ಷೆ ಬೇಡುವದಕ್ಕೆ ನನಗೆ ನಾಚಿಕೆಯಾಗುತ್ತದೆ.4ಈ ಮನೆವಾರ್ತೆಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾದದ್ದು ಗೊತ್ತಾಯಿತು ಎಂದು ತನ್ನೊಳಗೆ ಅಂದುಕೊಂಡು,5ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು - ನೀನು ನನ್ನ ಯಜಮಾನನಿಗೆ ಏನು ಕೊಡಬೇಕು ಎಂದು ಕೇಳಲು6ಅವನು ನೂರು ಬುದ್ದಲಿ ಎಣ್ಣೆ ಎಂದಾಗ ಅವನಿಗೆ - ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರಿ ಎಂದು ಹೇಳಿದನು.7ಬಳಿಕ ಮತ್ತೊಬ್ಬನನ್ನು - ನೀನು ಏನು ಕೊಡಬೇಕು ಎಂದು ಕೇಳಲು ಅವನು - ಒಂದು ನೂರು ಖಂಡಗ ಗೋಧಿ ಅಂದಾಗ ಅವನಿಗೆ - ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡಗ ಎಂದು ಬರಿ ಎಂದು ಹೇಳಿದನು.8ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು ಕುರಿತು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳ ಪರಲೋಕ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ.9ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.10ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅನ್ಯಾಯಗಾರನಾಗಿರುವವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗಿರುವನು.11ಹೀಗಿರುವದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಕೊಟ್ಟಾರು?12ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಕೊಟ್ಟಾರು?13ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ ಅಂದನು.ಯೇಸು ನುಡಿದ ನಾನಾ ವಚನಗಳು
14ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.15ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರೆದುರು ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಠಿಯಲ್ಲಿ ಅಸಹ್ಯವಾಗಿದೆ.16ಧರ್ಮಶಾಸ್ತ್ರವೂ ಪ್ರವಾದಿಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯವು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲಾತ್ಕಾರವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.17ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವದು ಸುಲಭ.18ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.ಭೋಗ ಪುರುಷನು - ಭಿಕ್ಷಗಾರನು ಇವರ ದೃಷ್ಟಾಂತ
19ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲ ವಿಧವಾದ ಐಶ್ವರ್ಯಗಳಿಂದ ಕೂಡಿದವನಾಗಿ ಬೆಲೆಬಾಳುವ ನೇರಳೆ ಬಣದ ರೇಶಿಮೆ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವು ವೈಭವದೊಡನೆ ಸುಖವಾಗಿದ್ದು ಸಂತೋಷಪಡುತ್ತಿದ್ದನು.20ಅವನ ಮನೇ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದು ಕೊಂಡಿದ್ದನು.21ಇವನು ಮೈತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನವನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು; ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.22ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರ ಕ್ರಿಯಾದಿಗಳು ನಡೆದವು.23ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ -24ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ; ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ. ಎಂದು ಕೂಗಿ ಹೇಳಿದನು.25ಆದರೆ ಅಬ್ರಾಹಾಮನು - ಕಂದಾ ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.26ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು ಅಂದನು.27ಆಗ ಅವನು - ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.28ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಂದಾರು. ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ ಅಂದನು.29ಆದಕ್ಕೆ ಅಬ್ರಹಾಮನು - ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ; ಅವುಗಳನ್ನು ಕೇಳಲಿ ಅನ್ನಲು -30ಅವನು ತಂದೆಯೇ ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ದೇವರ ಕಡೆಗೆ ತಿರುಗಿಕೊಳ್ಳುವರು ಅಂದನು.31ಅಬ್ರಹಾಮನು ಅವನಿಗೆ - ಅವರು ಮೋಶೆಯ ಮಾತನ್ನೂ ಪ್ರವಾಧಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವದಿಲ್ಲ ಎಂದು ಹೇಳಿದನು.
17ಮತ್ತೊಬ್ಬರಿಗೆ ವಿಘ್ನವಾಗದೆ ಅವರ ತಪ್ಪುಗಳನ್ನು ಕ್ಷಮಿಸಬೇಕೆಂಬುವ ಬೋಧೆ
(ಮತ್ತಾ. 18. 6,7,15,21,22)
1ಯೇಸು ತನ್ನ ಶಿಷ್ಯರಿಗೆ - ಅಡ್ಡಿ ಆತಂಕಗಳು ಬಾರದೆ ಇರಲಾರವು; ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?2ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ತೊಂದರೆಗಳನ್ನು ಓಡ್ಡುವದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವದೇ ಲೇಸು.3ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು; ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.4ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪದುತ್ತೇನೆ, ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು ಎಂದು ಹೇಳಿದನು.ನಂಬಿಕೆಯ ಮಹತ್ವದ ವರ್ಣನೆ.
(ಮತ್ತಾ. 17. 20; 21,22.)
5ಅಪೊಸ್ತಲರು ಸ್ವಾಮಿಗೆ - ನಮ್ಮ ನಂಬಿಕೆಯನ್ನು ಹೆಚ್ಚಿಸು ಎಂದು ಹೇಳಲು6ಸ್ವಾಮಿಯು - ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅಂಜೂರದಮರಕ್ಕೆ- ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವದು ಅಂದನು.ಮಾಡಬೇಕಾದದ್ದನ್ನು ಮಾಡುವದು ನಮ್ಮ ಕರ್ತವ್ಯವೇ ಹೊರತು ಪುಣ್ಯಕಾರ್ಯವಲ್ಲವೆಂಬ ಬೋಧೆ
7ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ - ನೀನು ತಟ್ಟನೆ ಬಂದು ಊಟಕ್ಕೆ ಕೂತುಕೋ ಎಂದು ಹೇಳುವನೇ?8ಹಾಗೆ ಹೇಳದೆ - ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು; ಆ ಮೇಲೆ ನೀನು ಊಟಮಾಡು, ಕೂಡಿ ಎಂದು ಹೇಳುವನಲ್ಲವೇ.9ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ - ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ.10ನೀವು ನಿಮಗೆ ಅಪ್ಪಣೆಯಾಗಿರುವದನ್ನೆಲ್ಲಾ ಮಾಡಿದ ಮೇಲೆ ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ ಅನ್ನಿರಿ ಎಂದು ಹೇಳಿದನು.ಯೇಸು ಹತ್ತುಮಂದಿ ಕುಷ್ಠರೋಗಿಗಳನ್ನು ಸ್ವಸ್ಥಮಾಡಿದಾಗ ಒಬ್ಬನು ಮಾತ್ರ ಬಂದು ಕೃತಜ್ಞೆತೆಯನ್ನು ಸೂಚಿಸಿದ್ದು
11ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.12ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು ಯೇಸುವೇ,13ಗುರುವೇ, ನಮ್ಮ ಮೇಲೆ ದಯವಿಡು ಎಂದು ಕೂಗಿಹೇಳಿದರು.14ಆತನು ಅವರನ್ನು ನೋಡಿ - ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.15ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದು16ಆತನಿಗೆ ಉಪಕಾರಸ್ತುತಿಮಾಡಿ ಕೃತಜ್ಞೆತೆಯನ್ನು ಸೂಚಿಸಿದನು. ಅವನು ಸಮಾರ್ಯದವನು.17ಯೇಸು ಇದನ್ನು ನೋಡಿ - ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ?18ದೇವರನ್ನು ಸ್ತುತಿಸುವದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ ಎಂದು ಹೇಳಿ ಅವನಿಗೆ ಎದ್ದು ಹೋಗು,19ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ ಎಂದು ಹೇಳಿದನು.ದೇವರ ರಾಜ್ಯವು ಯಾವಾಗ ಮತ್ತು ಎಲ್ಲಿ ಬರುವದು ಎಂಬ ವಿಷಯವಾಗಿ ಯೇಸು ಉಪದೇಶಮಾಡಿದ್ದು
20ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ - ದೇವರ ರಾಜ್ಯವು ಸೂಚನೆಗಳನ್ನು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.21ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ ಎಂದು ಹೇಳುವದಕ್ಕಾಗದು; ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ ಎಂದು ಹೇಳಿದನು.22ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿವಸಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.23ಜನರು ನಿಮಗೆ - ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ.24ಯಾಕಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.25ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಜನರಿಂದ ತಿರಸ್ಕರಿಸಲ್ಪಡಬೇಕು.26ನೋಹನ ದಿವಸಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿವಸಗಳಲ್ಲಿಯೂ ನಡೆಯುವದು.27ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.28ಮತ್ತು ಲೋಟನ ದಿವಸಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.29ಆದರೆ ಲೋಟನು ಸೊದೊಮ್ ಊರನ್ನು ಬಿಟ್ಟುಹೋದ ದಿವಸದಲ್ಲಿ ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.30ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿವಸದಲ್ಲಿ ಅದೇ ರೀತಿಯಾಗಿ ಇರುವುದು.31ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವದಕ್ಕೆ ಇಳಿದು ಬರಬಾರದು; ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರಿಗಿ ಹಿಂದಕ್ಕೆ ಹೋಗಬಾರದು.32ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ.33ತನ್ನ ಪ್ರಾಣವನ್ನು ಉಳಿಸಿ ಕೊಳ್ಳಬೇಕೆಂದಿರುವವನು ಅದನ್ನು ಕಳದುಕೊಳ್ಳುವನು; ಪ್ರಾಣವನ್ನು ಕಳದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.34ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು.35ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು ಅಂದನು.3637ಈ ಮಾತಿಗೆ ಶಿಷ್ಯರು - ಕರ್ತನೇ, ಅದು ಎಲ್ಲಿ ಆಗುವದು ಎಂದು ಕೇಳಲು ಆತನು ಅವರಿಗೆ - ಹೆಣ ಎಲ್ಲಿಯೋ ಅಲ್ಲಿಯೇ ಹದ್ದುಗಳು ಬಂದು ಸೇರುವವು ಎಂದು ಉತ್ತರಕೊಟ್ಟನು.
18ಯೇಸು ಪ್ರಾರ್ಥನೆಯ ವಿಷಯದಲ್ಲಿ ಅನ್ಯಾಯಗಾರನಾದ ನ್ಯಾಯಾಧಿಪತಿಯ ಸಾಮ್ಯದ ಮೂಲಕ ಉಪದೇಶಮಾಡಿದ್ದು
1ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯನ್ನು ಹೇಳಿದನು.2ಅದೇನಂದರೆ - ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.3ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು - ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು ಎಂದು ಕೇಳಿಕೊಳ್ಳುತ್ತಿದ್ದಳು.4ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು-ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ;5ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು; ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನ ತಲೆ ಕೆಡಿಸಿಬಿಟ್ಟಾಳು, ಎಂದು ತನ್ನೊಳಗೆ ಅಂದುಕೊಂಡನು.6ಸ್ವಾಮಿಯು ಈ ಸಾಮ್ಯವನ್ನು ಹೇಳಿದ ಮೇಲೆ - ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ.7ದೇವರಾದುಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ.8ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುಲು ಸಾಧ್ಯವೋ? ಅಂದನು.ಪ್ರಾರ್ಥನೆಮಾಡುವದಕ್ಕಾಗಿ ದೇವಾಲಯಕ್ಕೆ ಹೋದ ಫರಿಸಾಯನನ್ನೂ ಸುಂಕದವನನ್ನೂ ಕುರಿತದ್ದು
9ಇದಲ್ಲದೇ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಹೇಳಿದನು.10ಅದೇನಂದರೆ - ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು; ಒಬ್ಬನು ಫರಿಸಾಯನು, ಒಬ್ಬನು ಸುಂಕದವನು.11ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ - ದೇವರೇ, ದರೋಡೆಕೋರರು, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ; ಆದದರಿಂದ ನಿನಗೆ ಸ್ತೋತ್ರಮಾಡುತ್ತೇನೆ.12ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ ಎಂದು ಹೇಳಿಕೊಂಡು ಪ್ರಾರ್ಥಿಸಿದನು.13ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡಿದುಕೊಳ್ಳುತ್ತಾ - ದೇವರೇ, ಪಾಪಿಯಾದ ನನ್ನನ್ನು ಕರುಣಿಸು ಅಂದನು.14ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು, ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು.
(ಮತ್ತಾ. 19. 13-15; ಮಾರ್ಕ 10. 13-16)
15ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು ಶಿಷ್ಯರು ಕಂಡು ಅವರನ್ನು ಗದರಿಸಿದರು.16ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರತರಿಸಿ-ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ.17ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವದೇ ಇಲ್ಲ ಅಂದನು.ನಿತ್ಯಜೀವವನ್ನು ಹೇಗೆ ಪಡೆಯಬೇಕೆಂದು ಒಬ್ಬ ಐಶ್ವರ್ಯವಂತನು ಕೇಳಿದ್ದಕ್ಕೆ ಯೇಸು ಹಣದ ಭ್ರಾಂತಿಯಿಂದಾಗುವ ಕೇಡನ್ನು ತೋರಿಸಿದ್ದು.
(ಮತ್ತಾ. 19. 16-29; ಮಾರ್ಕ 10. 17-30)
18ಒಬ್ಬ ಅಧಿಕಾರಿಯು ಬಂದು - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಲಾಗಿ19ಯೇಸು ಅವನಿಗೆ - ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.20ವ್ಯಭಿಚಾರ ಮಾಡಬಾರದು; ನರಹತ್ಯ ಮಾಡಬಾರದು; ಕದಿಯ ಬಾರದು; ಸುಳ್ಳುಸಾಕ್ಷಿ ಹೇಳಬಾರದು; ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ, ಎಂದು ಹೇಳಿದನು.21ಅದಕ್ಕವನು - ನಾನು ಚಿಕ್ಕಂದಿನಿಂದಲೂ ಇವೆಲ್ಲಕ್ಕೂ ಸರಿಯಾಗಿ ನಡಕೊಂಡು ಬಂದಿದ್ದೇನೆ ಎಂದು ಹೇಳಲು22ಯೇಸು ಅದನ್ನು ಕೇಳಿ ಅವನಿಗೆ - ಇನ್ನೂ ನಿನಗೆ ಒಂದು ಕೊರತೆಯಿದೆ; ನಿನಗಿರುವದೆಲ್ಲ ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.23ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು.24ಆಗ ಯೇಸು ಅವನನ್ನು ನೋಡಿ - ಹಣವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.25ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯಕಣ್ಣಿನಲ್ಲಿ ನುಗ್ಗುವುದು ಸುಲಭ ಅಂದನು.26ಈ ಮಾತನ್ನು ಕೇಳಿದವರು - (ಹೀಗಿದ್ದರೆ) ಯಾರಿಗೆ ರಕ್ಷಣೆಯಾದೀತು ಎಂದು ಕೇಳಲು27ಆತನು - ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ ಅಂದನು.28ಆಗ ಪೇತ್ರನು - ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂದೆ ಬಂದೆವು ಎಂದು ಹೇಳಲು29ಆತನು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ,30ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ; ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವದು ಎಂದು ಹೇಳಿದನು.ಯೇಸು ತನ್ನ ಮರಣ ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು
(ಮತ್ತಾ. 20. 17-19; ಮಾರ್ಕ 10. 32-34)
31ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - ನೋಡಿರಿ, ನಾವು ಯೆರುಸಲೆಮಿಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವದು.32ಹೇಗಂದರೆ - ಅವನನ್ನು ಅನ್ಯರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, ಕೊರಡೆಗಳಿಂದ ಹೊಡೆಯುವರು, ಕೊಂದುಹಾಕುವರು;33ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು ಎಂದು ಹೇಳಿದನು.34ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಅವುಗಳ ಅರ್ಥ ಅವರಿಗೆ ತಿಳಿಯಲಿಲ್ಲ.ಯೇಸುವು ಒಬ್ಬ ಕುರುಡನನ್ನು ಸ್ವಸ್ಥಮಾಡಿದ್ದು
(ಮತ್ತಾ. 20. 29-34; ಮಾರ್ಕ 10. 46-52)
35ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕೂತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು36ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು.37ಅವರು ಅವನಿಗೆ - ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ38ಅವನು - ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿಕೊಂಡನು.39ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು - ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಮತ್ತಷ್ಟು ಬೇಡಿಕೊಂಡನು.40ಆಗ ಯೇಸು ನಿಂತು ಅವನನ್ನು ತನ್ನ ಬಳಿಗೆ ಕರೆದುಕೊಂಡು ಬರುವುದಕ್ಕೆ ಅಪ್ಪಣೆಕೊಟ್ಟನು.41ಅವನು ಹತ್ತಿರಕ್ಕೆ ಬಂದನು. ಆತನು ಅವನಿಗೆ - ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ? ಎಂದು ಕೇಳಲು ಅವನು - ನನಗೆ ಕಣ್ಣುಕಾಣುವಂತೆ ಮಾಡಬೇಕು ಕರ್ತನೇ ಅಂದನು.42ಯೇಸು ಅವನಿಗೆ - ನಿನಗೆ ಕಣ್ಣುಕಾಣುವಂತಾಗಲಿ ಎಂದೋ ಹೇಳಿ; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ ಎಂದು ಹೇಳಿದನು.43ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು; ಅವನು ದೇವರನ್ನು ಕೊಂಡಾಡುತ್ತಾ ಆತನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.
19ಯೇಸು ಸುಂಕದವನಾದ ಜಕ್ಕಾಯನ ಮನೆಗೆ ಹೋದದ್ದು
1ಯೇಸು ಯೆರಿಕೋ ಊರನ್ನು ಹಾದುಹೋಗುವಾಗ.2ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಸುಂಕದ ಗುತ್ತಿಗೆದಾರನು ಮತ್ತು ಐಶ್ವರ್ಯವಂತನಾಗಿದ್ದನು.3ಅವನು ಯೇಸು ಹೇಗಿದ್ದಾನೆಂದು ನೋಡಲು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು.4ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು.5ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ - ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು ಎಂದು ಅವನಿಗೆ ಹೇಳಲು,6ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು7ಇದನ್ನು ನೋಡಿದವರೆಲ್ಲರು - ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವದಕ್ಕೆ ಹೋಗಿದ್ದಾನೆ ಎಂದು ಗುಣುಗುಟ್ಟಿದರು.8ಆದರೆ ಜಕ್ಕಾಯನು ನಿಂತುಕೊಂಡು ಸ್ವಾಮಿಗೆ - ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಎಂದು ಹೇಳಿದನು.9ಇದನ್ನು ಕೇಳಿ ಯೇಸು - ಈಹೊತ್ತು ಈ ಮನೆಗೆ ರಕ್ಷಣೆಯಾಯಿತು; ಇವನು ಸಹ ಅಬ್ರಹಾಮನ ವಂಶದವನಲ್ಲವೇ.10ಮನುಷ್ಯಕುಮಾರನು ದಾರಿತಪ್ಪಿ ಹೋದವರನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು ಎಂದು ಹೇಳಿದನು.ಹತ್ತು ಮೊಹರಿಗಳ
ವಿಷಯವಾದ ಸಾಮ್ಯ(ಮತ್ತಾ. 25. 14-30)
11ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು.12ಅದೇನಂದರೆ - ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.13ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ನಾಣ್ಯಗಳನ್ನು ಕೊಟ್ಟು - ನಾನು ಬರುವತನಕ ವ್ಯಾಪಾರಮಾಡಿಕೊಂಡಿರಿ ಎಂದು ಹೇಳಿ ಹೊರಟು ಹೋದನು.14ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದನು.15ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳೂವುದಕ್ಕಾಗಿ ಅವರನ್ನು ತನ್ನ ಬಳಿಗೆ ಕರೆಸಿದನು.16ಮೊದಲನೆಯವನು ಆತನ ಮುಂದೆ ಬಂದು - ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು ಅನ್ನಲು17ಅವನು ಅವನಿಗೆ - ಭಲಾ! ನೀನು ಒಳ್ಳೇ ಆಳು; ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಕೆಯುಳ್ಳವನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು ಎಂದು ಹೇಳಿದನು.18ಎರಡನೆಯವನು ಬಂದು - ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಐದು ನಾಣ್ಯಗಳು ದೊರಕಿದವು ಅನ್ನಲು19ಅವನು ಆ ಆಳಿಗೆ - ನೀನು ಸಹ ಐದು ಗ್ರಾಮಗಳ ಮೇಲೆ ಅಧಿಕಾರಿಯಾಗಿರು ಎಂದು ಹೇಳಿದನು.20ಬಳಿಕ ಮತ್ತೊಬ್ಬನು ಬಂದು - ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ.21ನೀನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವವನು ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು ಅಂದನು,22ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?23ಹಾಗಾದರೆ ನೀನು ನನ್ನ ಹಣವನ್ನು ಸಾಹುಕಾರನ ಕೈಯಲ್ಲಿ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಹೇಳಿ24ಹತ್ತಿರ ನಿಂತಿದ್ದವರಿಗೆ - ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಮೊಹರಿಗಳುಳ್ಳವನಿಗೆ ಕೊಡಿರಿ ಎಂದು ಹೇಳಿದನು.25ಅವರು - ದೊರೆಯೇ, ಹತ್ತು ನಾಣ್ಯಗಳು ಅವನಲ್ಲಿ ಅವೆಯಲ್ಲಾ ಎಂದು ಅವನಿಗೆ ಹೇಳಿದರು.26ಅದಕ್ಕವನು - ಇದ್ದವರಿಗೆಲ್ಲಾ ಕೊಡಲ್ಪಡುವದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು ಎಂದು ನಾನು ನಿಮಗೆ ಹೇಳುತ್ತೇನೆ;27ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.ಯೇಸು ಅರಸನಂತೆ ಯೆರೂಸಲೇಮಿಗೆ ಪ್ರವೇಶಮಾಡಿದ್ದು. ದೇವಾಲಯದಲ್ಲಿದ್ದ ವ್ಯಾಪಾರಸ್ಥರನ್ನು ಹೊರಗೆ ಹೊರಡಿಸಿದ್ದು
(ಮತ್ತಾ. 21. 1-16; ಮಾರ್ಕ 11. 1-18; ಯೋಹಾ. 12. 12-16)
28ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇಮಿಗೆ ಮುಂದಾಗಿ ಹೋದನು.29ಆನಂತರ ಆತನು ಎಣ್ಣೇಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಾಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ;30ಅದರೊಳಗೆ ಹೋಗುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೇಮರಿಯನ್ನು ಕಾಣುವಿರಿ; ಇದುವರೆಗೆ ಅದರಮೇಲೆ ಯಾರೂ ಹತ್ತಿರುವುದಿಲ್ಲ; ಅದನ್ನು ಬಿಚ್ಚಿ ಹಿಡುಕೊಂಡು ಬನ್ನಿರಿ.31ಯಾವನಾದರೂ ನಿಮ್ಮನ್ನು ಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದರೆ ಇದು ಸ್ವಾಮಿಯವರಿಗೆ ಬೇಕಾಗಿದೆ ಅನ್ನಿರಿ ಎಂದು ಹೇಳಿಕಳುಹಿಸಿದನು.32ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.33ಅವರು ಆ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು - ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಅವರನ್ನು ಕೇಳಿದ್ದಕ್ಕೆ34ಅವರು - ಇದು ಸ್ವಾಮಿಯವರಿಗೆ ಬೇಕಾಗಿದೆ ಎಂದು ಹೇಳಿದರು.35ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೇಮರಿಯ ಮೇಲೆ ಹಾಕಿ ಯೇಸುವನ್ನು ಕೂರಿಸಿದರು.36ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.37ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ -
38ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ,ಪರಲೋಕದಲ್ಲಿ ಸಮಾಧಾನ,
ಮೇಲಣಲೋಕಗಳಲ್ಲಿ ಮಹಿಮೆ
ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವದಕ್ಕೆ ತೊಡಗಿದರು.
39ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ - ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಎಂದು ಹೇಳಿದ್ದಕ್ಕೆ40ಆತನು - ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು ಎಂದು ನಿಮಗೆ ಹೇಳುತ್ತೇನೆ ಅಂದನು.41ತರುವಾಯ ಆತನು ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತಾ -42ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡರೆ ಎಷ್ಟೋ ಒಳ್ಳೇಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.43-44ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ ಮುತ್ತಿಗೆ ಹಾಕಿ ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿವಸಗಳು ನಿನ್ನ ಮೇಲೆ ಬರುವವು ಅಂದನು.45ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ -46ನನ್ನ ಆಲಯವು ಪ್ರಾರ್ಥನಾಲಯವಾಗಿರುವದು ಎಂದು ಬರೆಯಲ್ಪಟ್ಟಿದೆಯಲ್ಲಾ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡಿದ್ದೀರಿ ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು.47ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಉಪದೇಶಮಾಡುತ್ತಿದ್ದನು. ಅಷ್ಟರಲ್ಲಿ ಮಹಾಯಾಜಕರೂ ಶಾಸ್ತ್ರಿಗಳೂ ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವದಕ್ಕೆ ಸಂದರ್ಭನೋಡುತ್ತಿದ್ದರು.48ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಉಪದೇಶವನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.
20ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ವಿಚಾರಿಸಿದಾಗ ಆತನು ತಕ್ಕ ಉತ್ತರಕೊಟ್ಟು ಅವರು ಮಾಡಿದ ದೇವದ್ರೋಹವನ್ನು ಸಾಮ್ಯಗಳಿಂದ ಸೂಚಿಸಿದ್ದು
(ಮತ್ತಾ. 21. 23-46; ಮಾರ್ಕ 11. 27-12. 12)
1ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮಹಾಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು -2ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು ಎಂದು ಆತನನ್ನು ಕೇಳಲು3ಯೇಸುವು ಅವರಿಗೆ - ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ.4ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ ಎಂದು ಅವರನ್ನು ಕೇಳಿದನು.5ಆಗ ಅವರು - ಪರಲೋಕದಿಂದ ಬಂತೆಂದು ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು;6ಮನುಷ್ಯರಿಂದ ಬಂತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡು7ಅದು ಎಲ್ಲಿಂದ ಬಂದಿತೋ ನಾವರಿಯೆವು ಎಂದು ಉತ್ತರಕೊಟ್ಟರು.8ಆಗ ಯೇಸು ಅವರಿಗೆ - ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ ಎಂದು ಹೇಳಿದನು.9ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನಂದರೆ - ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.10ಫಲಕಾಲ ಬಂದಾಗ ದ್ರಾಕ್ಷಿಯತೋಟದ ಪಾಲನ್ನು ತೆಗೆದುಕೊಳ್ಳವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಲಿ ಕಳುಹಿಸಿಬಿಟ್ಟರು.11ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಲಿ ಕಳುಹಿಸಿಬಿಟ್ಟರು.12ಆ ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯವಾಗುವಷ್ಟು ಹೊಡೆದು ಹೊರಕ್ಕೆ ಅಟ್ಟಿದರು.13ಆಗ ಆ ದ್ರಾಕ್ಷಿಯ ತೋಟದ ಧಣಿಯು - ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು ಅಂದುಕೊಂಡನು.14ಆದರೆ ಆ ಒಕ್ಕಲಿಗರು ದ್ರಾಕ್ಷಾತೋಟದ ಯಜಮಾನನ ಮಗನನ್ನು ಕಂಡು - ಇವನೇ ಬಾಧ್ಯಸ್ಥನು; ಇವನನ್ನು ಕೊಂದುಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವದು ಎಂದು ಒಬ್ಬರಸಂಗಡಲೊಬ್ಬರು ಮಾತನಾಡಿಕೊಂಡು15ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ ಕೊಂದುಹಾಕಿದರು. ಹಾಗಾದರೆ ದ್ರಾಕ್ಷಿಯತೋಟದ ಧಣಿಯು ಅವರಿಗೆ ಏನು ಮಾಡಿಯಾನು?16ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು ಅಂದನು.17ಇದನ್ನು ಜನರು ಕೇಳಿ - ಹಾಗಾಗಬಾರದು ಅಂದರು. ಆದರೆ ಆತನು ಅವರನ್ನು ದೃಷ್ಟಿಸಿ ನೋಡಿ - ಹಾಗಾದರೆಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು
ಎಂದು ಬರೆದಿರುವ ಮಾತೇನು?
18ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು; ಆ ಕಲ್ಲು ಯಾರ ಮೇಲೆ ಬೀಳುವದೋ ಅದು ಅವನನ್ನು ಪುಡಿಪುಡಿ ಮಾಡುವುದು ಅಂದನು.19ಶಾಸ್ತ್ರಿಗಳೂ ಮಹಾಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡಿದರು; ಆದರೆ ಜನರಿಗೆ ಭಯಪಟ್ಟರು.ವಿರೋಧಿಗಳು ಯೇಸುವನ್ನು ಮಾತಿನಲ್ಲಿ ಸಿಕ್ಕಿಸುವದಕ್ಕೆ ಪ್ರಯತ್ನಮಾಡಿ ಸೋತುಹೋದದ್ದು
(ಮತ್ತಾ. 22. 15-23. 7; ಮಾರ್ಕ 12. 13-40)
20ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚ್ಚು ಹಾಕುತ್ತಾ ನೀತಿವಂತರಂತೆ ನಟಿಸುತ್ತಿರುವ ಗೊಢಾಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಹಿಡಿಯುವದಕ್ಕೆ (ಆತನ ಬಳಿಗೆ) ಕಳುಹಿಸಿದರು.21ಅವರು - ಬೋಧಕನೇ, ನೀನು ಸರಿಯಾಗಿ ಮಾತಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.22ಕೈಸರನಿಗೆ ಕಂದಾಯ ಕೊಡುವದು ಸರಿಯೋ ಸರಿಯಲ್ಲವೋ ಎಂದು ಆತನನ್ನು ಕೇಳಿದರು.23ಯೇಸುವು ಅವರ ಕುಯುಕ್ತಿಯನ್ನು ಕಂಡುಕೊಂಡು24ಅವರಿಗೆ - ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ ಎಂದು ಕೇಳಿದ್ದಕ್ಕೆ ಅವರು - ಕೈಸರನದು ಅಂದರು.25ಆತನು ಅವರಿಗೆ - ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು.26ಆತನ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ ಜನರ ಮುಂದೆ ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು.27ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ -28ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.29ಒಳ್ಳೇಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.30-31ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.32ಕಡೆಯಲ್ಲಿ ಆ ಹೆಂಗಸೂ ಸತ್ತಳು.33ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ ಅಂದರು.34ಯೇಸು ಅವರಿಗೆ - ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ;35ಆದರೆ ಮೇಲಣ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ.36ಅವರು ಇನ್ನು ಮರಣಕ್ಕೆ ಗುರಿಯಾಗುವದೇ ಇಲ್ಲ. ಪುನರುತ್ಥಾನವನ್ನು ಹೊಂದಿದವರಾಗಿದ್ದು ದೇವದೂತರಿಗೆ ಸರಿಸಮಾನರೂ ದೇವರ ಮಕ್ಕಳೂ ಆಗಿರುತ್ತಾರೆ.37ಸತ್ತವರು ಬದುಕಿ ಏಳುತ್ತಾರೆಂಬದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಎಂದು ಹೇಳಿದ್ದಾನೆ.38ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ ಎಂದು ಹೇಳಿದನು.39ಶಾಸ್ತ್ರಿಗಳಲ್ಲಿ ಕೆಲವರು-ಬೋಧಕನೇ, ಚೆನ್ನಾಗಿ ಹೇಳಿದಿ ಅಂದರು.40ಆತನನ್ನು ಇನ್ನೇನು ಕೇಳುವದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.41ಆಗ ಯೇಸುವು - ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?
42-43ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನುನನ್ನ ಬಲಗಡೆಯಲ್ಲಿ ಕೂಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು
ಎಂಬದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.
44ದಾವೀದನು ಆತನನ್ನು ಒಡೆಯನೆಂದು ಹೇಳಿದಮೇಲೆ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಅವರನ್ನು ಕೇಳಿದನು.45ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ-46ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.47ಅವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
21ದೇವರಿಗೆ ಕಾಣಿಕೆಕೊಡುವವರೊಳಗಿನ ತಾರತಮ್ಯವನ್ನು ಕುರಿತು ಮಾತನಾಡಿದ್ದು
(ಮಾರ್ಕ 12. 41-44)
1ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವುದನ್ನು ಕಂಡನು.2ಆಗ ಒಬ್ಬ ಬಡ ವಿಧವೆಯು ಬಂದು ಎರಡು ಕಾಸುಗಳನ್ನು ಹಾಕುವದನ್ನು ಯೇಸುವು ಗಮನಿಸಿ -3ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ.4ಹೇಗಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆಕೊಟ್ಟರು; ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು ಅಂದನು.ಯೇಸು ಯೆರೂಸಲೇಮಿನ ನಾಶವನ್ನೂ ಯುಗದ ಸಮಾಪ್ತಿಯನ್ನೂ ಕುರಿತು ಮುಂತಿಳಿಸಿದ್ದು
(ಮತ್ತಾ. 24. 1-44; ಮಾರ್ಕ 13. 1-37)
5ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ6ಯೇಸುವು - ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು ಅಂದನು.7ಅವರು - ಬೋಧಕನೇ, ಅದು ಯಾವಾಗ ಆಗುವದು? ಅದು ಸಂಭವಿಸುವಾಗ ಯಾವ ಸೂಚನೆ ಗಳುಂಟಾಗುವುವು? ಎಂದು ಆತನನ್ನು ಕೇಳಲು8ಯೇಸುವು ಹೇಳಿದ್ದೇನಂದರೆ - ನೀವು ಮೋಸಹೋಗದಂತೆ ಎಚ್ಚರವಾಗಿರಿ. ಯಾಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ನಾನೇ ಕ್ರಿಸ್ತನು, ನಾನೇ ಕ್ರಿಸ್ತನು ಎಂತಲೂ ಆ ಕಾಲ ಹತ್ತಿರವಾಯಿತು ಎಂತಲೂ ಹೇಳುವರು; ಅವರ ಹಿಂದೆ ಹೋಗಬೇಡಿರಿ.9ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ; ಯಾಕೆಂದರೆ ಇದೆಲ್ಲಾ ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.10ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ - ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು;11ಮತ್ತು ಮಹಾಭೂಕಂಪಗಳಾಗುವವು; ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು; ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.12ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯು ಅಧಿಪತಿಗಳ ಮುಂದೆಯು ಕರೆದುಕೊಂಡುಹೋಗಿ ಹಿಂಸೆಪಡಿಸುವರು.13ಇದು ಸಾಕ್ಷಿಹೇಳುವದಕ್ಕೆ ನಿಮಗೆ ಅನುಕೂಲವಾಗುವದು.14ಆದದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನಾವು ಮುಂದಾಗಿ ಯೋಚಿಸುವದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ.15ಯಾಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತಾಡುವದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.16ಆದರೆ ತಂದೆತಾಯಿಗಳೂ ಅಣ್ಣತಮ್ಮಂದಿರೂ ಬಂಧುಬಾಂಧವರೂ ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು; ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.17ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.18ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವದಿಲ್ಲ.19ನೀವು ಸಹನೆಯಿಂದ ನಿಮ್ಮ ಪ್ರಾಣಗಳನ್ನು ಪಡದುಕೊಳ್ಳುವಿರಿ.20ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ.21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ; ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.22ಯಾಕೆಂದರೆ ಬರೆದಿರುವದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.23ಆ ದಿನಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು.24ಅವರು ಕತ್ತಿಯ ಬಾಯಿಗೆ ಗುರಿಯಾಗುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.25ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೂಮಿಯ ಮೇಲೆ ಸಮುದ್ರದ ಮತ್ತು ತೆರೆಗಳ ಘೋಷದ ನಿಮಿತ್ತವಾಗಿ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವದು.26ಆಕಾಶದ ಶಕ್ತಿಗಳು ಕದಲುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.27ಆಗ ಮನುಷ್ಯಕುಮಾರನು ಬಲದಿಂದಲೂ ಬಹುಮಹಿಮೆಯಿಂದಲೂ ಮೇಘದಲ್ಲಿ ಬರುವದನ್ನು ಕಾಣುವರು.28ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಗಳನ್ನು ಮೇಲಕ್ಕೆ ಎತ್ತಿರಿ; ನಿಮ್ಮ ಬಿಡುಗಡೆಯು ಸಮೀಪವಾಗಿದೆ ಅಂದನು.29ಯೇಸುವು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ - ಅಂಜೂರ ಮುಂತಾದ ಮರಗಳನ್ನೂ ನೋಡಿರಿ.30ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳುಕೊಳ್ಳೂತ್ತೀರಲ್ಲಾ.31ಹಾಗೆಯೇ ಇವುಗಳಾಗುವದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ.32ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.33ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.34ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿ ಭೋಜನದ ಮದದಿಂದಲೂ ಅಮಲಿನಿಂದಲೂ ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.35ಆ ದಿವಸವು ಭೂನಿವಾಸಿಗಳೆಲ್ಲರ ಮೇಲೆ ಬರುವದು.36ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.ಅಧಿಕಾರಿಗಳು ಯೇಸುವನ್ನು ಕೊಲ್ಲುವದಕ್ಕೆ ಉಪಾಯಮಾಡಿದ್ದು
(ಮತ್ತಾ. 26. 1-5; 14-16; ಮಾರ್ಕ 14. 1,2,10,11)
37ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೇ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ಉಳಿದುಕೊಳ್ಳುತ್ತಾ ಇದ್ದನು.38ಜನರೆಲ್ಲರು ಆತನ ಉಪದೇಶವನ್ನು ಕೇಳಬೇಕೆಂದು ಬೆಳಿಗ್ಗೆ ಬೇಗನೆ ಎದ್ದು ದೇವಾಲಯಕ್ಕೆ ಆತನ ಬಳಿಗೆ ಬರುತ್ತಿದ್ದರು.
221ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಪಸ್ಕವೆಂಬ ಹಬ್ಬವು ಹತ್ತಿರವಾದಾಗ2ಮಹಾಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದು ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.3ಆಗ ಸೈತಾನನು ಹನ್ನೆರಡು ಮಂದಿಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು ಅವನು4ಮಹಾಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತಾಡಿದನು.5ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು6ಅವನು ಒಡಂಬಟ್ಟು ಆತನನ್ನು ಗದ್ದಲವಾಗದಂತೆ ಅವರಿಗೆ ಹಿಡುಕೊಡುವದಕ್ಕೆ ಅನುಕೂಲವಾದ ಸಮಯವನ್ನು ನೋಡುತ್ತಿದ್ದನು.ಯೇಸು ತನ್ನ ಶಿಷ್ಯರ ಸಂಗಡ ಕಡೆಯ ಭೋಜನ ಮಾಡಿದ್ದು
(ಮತ್ತಾ. 26. 17-29; ಮಾರ್ಕ 14. 12-25; ಯೋಹಾ. 13. 1-35; 1 ಕೊರಿ. 11. 23-25)
7ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿವಸಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿವಸ ಬಂದಾಗ8ಯೇಸು ಪೇತ್ರನಿಗೂ ಯೋಹಾನನಿಗೂ - ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧತೆಮಾಡಿರಿ ಎಂಧು ಹೇಳಿ ಅವರನ್ನು ಕಳುಹಿಸಿದನು.9ಅವರು - ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ? ಎಂದು ಆತನನ್ನು ಕೇಳಲು10ಆತನು ಅವರಿಗೆ - ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ11ಆ ಮನೆಯ ಯಜಮಾನನಿಗೆ, 'ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ಕೊಠಡಿ ಎಲ್ಲಿ, ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾರೆ,' ಎಂದು ಹೇಳಿರಿ.12ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನೀವು ಭೋಜನಕ್ಕೆ ಸಿದ್ಧ ಮಾಡಿರಿ ಎಂದು ಹೇಳಿ ಕಳುಹಿಸಿದನು.13ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕ ಹಬ್ಬಕ್ಕೆ ಸಿದ್ದಮಾಡಿದರು.14ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು.15ಆಗ ಆತನು ಅವರಿಗೆ - ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ.16ಇನ್ನು ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವದೇ ಇಲ್ಲ ಎಂದು ಹೇಳಿದನು.17ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ - ಇದನ್ನು ತೆಗೆದುಕೊಂಡು ಹಂಚಿಕೊಂಡುಕುಡಿಯಿರಿ.18ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.19ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ; ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ ಅಂದನು.20ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.21ಆದರೂ ನೋಡಿರಿ, ನನ್ನನ್ನು ಹಿಡುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ.22ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಆದರೆ ಆತನನ್ನು ಹಿಡುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ ಅಂದನು.23ಇದನ್ನು ಕೇಳಿ ಅವರು - ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳ ತೊಡಗಿದರು.24ಇದಲ್ಲದೆ ತಮ್ಮಲ್ಲಿ ಯಾವನು ಹೆಚ್ಚಿನವನೆನಿಸಿಕೊಳ್ಳುವವನು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.25ಆಗ ಆತನು ಅವರಿಗೆ - ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ, ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ.26ನೀವು ಹಾಗಿರಬಾರದು; ನಿಮ್ಮಲ್ಲಿ ಹೆಚ್ಚಿನವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು.27ಯಾರು ಹೆಚ್ಚಿನವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.28ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು.29ಆದದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನಿಯಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ;30ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ.31ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿಮನ್ನು ಗೋಧಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು;32ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿ ಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು.33ಅದರೆ ಅವನು - ಕರ್ತನೇ, ನಿನ್ನ ಸಂಗಡ ಸೆರೆಮನೆಗೆ ಹೋಗುವದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ ಅನ್ನಲು ಆತನು - ಪೇತ್ರನೇ,34ನನ್ನ ವಿಷಯದಲ್ಲಿ - ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ ಅಂದನು.35ಮತ್ತು ಆತನು - ನಿಮ್ಮನ್ನು ನಾನು ಹಣ, ಕೈಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.36ಅದಕ್ಕೆ ಆತನು - ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.37ಯಾಕೆಂದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು ಎಂದು ಹೇಳಿದನು.38ಅವರು - ಕರ್ತನೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ ಅನ್ನಲು ಆತನು ಅವರಿಗೆ - ಅಷ್ಟು ಸಾಕು ಅಂದನು.ಯೇಸು ಗೆತ್ಸೇಮನೆತೋಟಕ್ಕೆ ಹೋಗಿ ಪ್ರಾರ್ಥಿಸಿದ್ದು; ಯೂದನು ಆತನನ್ನು ಶತ್ರುಗಳಿಗೆ ಹಿಡಿದುಕೊಟ್ಟಿದ್ದು
(ಮತ್ತಾ. 26. 36-56; ಮಾರ್ಕ 14. 32-50; ಯೋಹಾ. 18. 1-11)
39ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು.40ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ - ನೀವು ಶೋಧನೆಗೆ ಒಳಗಾಗದಂತೆ ದೇವರನ್ನು ಪ್ರಾರ್ಥಿಸಿರಿ ಎಂದು ಹೇಳಿದನು.41ಆ ಮೇಲೆ ಆತನು ಅವರನ್ನು ಬಿಟ್ಟು ಸ್ವಲ್ಪ ದೂರ ಹೋಗಿ ಮೊಣಕಾಲೂರಿ - ತಂದೆಯೇ,42ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಅಂದನು.43ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು ಆತನನ್ನು ಬಲಪಡಿಸಿದನು.44ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ ವೇದನೆಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂಮಿಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು.45ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು ಅವರು, ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವದನ್ನು ಕಂಡು ಅವರಿಗೆ -46ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ ಎಂದು ಹೇಳಿದನು.47ಆತನು ಇನ್ನೂ ಮಾತಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ,48ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು ಯೇಸು ಅವನಿಗೆ - ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುತ್ತೀಯಾ ಎಂದು ಕೇಳಿದನು.49ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ - ಕರ್ತನೇ, ನಾವು ಕತ್ತಿಯಿಂದ ಹೊಡೆಯೊಣವೋ ಎಂದು ಕೇಳಿದರು.50ಅಷ್ಟರಲ್ಲಿ ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಕತ್ತಿಯಿಂದ ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿಹಾಕಿದನು.51ಆದರೆ ಯೇಸು - ಇಷ್ಟಕ್ಕೇ ಬಿಡಿರಿ ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು.52ಬಳಿಕ ಯೇಸು ತನ್ನನ್ನು ಹಿಡಿಯುವದಕ್ಕೆ ಬಂದ ಮಹಾಯಾಜಕರಿಗೂ ದೇವಾಲಯದ ಕಾವಲಿನ ದಳವಾಯಿಗಳಿಗೂ ಸಭೆಯ ಹಿರಿಯರಿಗೂ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ?53ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ; ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ ಎಂದು ಹೇಳಿದನು.ಪೇತ್ರನು ಯೇಸುವನ್ನು ನಾನರಿಯೆನೆಂದು ಹೇಳಿದ್ದು; ಹಿರೀಸಭೆಯವರು ಯೇಸುವನ್ನು ಮರಣದಂಡನೆಗೆ ತಕ್ಕವನೆಂದು ತೀರ್ಪು ಮಾಡಿ ಅಧಿಪತಿಯ ಬಳಿಗೆ ತೆಗೆದುಕೊಂಡುಹೋದದ್ದು
(ಮತ್ತಾ. 26. 57-75; ಮಾರ್ಕ 14. 53-72; ಯೋಹಾ. 18:12-27)
54ಅವರು ಆತನನ್ನು ಹಿಡಿದು ಮಹಾ ಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು; ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು.55ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕೂಳಿತುಕೊಂಡಿರಲು ಅವರ ನಡುವೆ ಪೇತ್ರನೂ ಕುಳಿತುಕೊಂಡನು.56ಅವನು ಬೆಳಕಿಗೆ ಮುಖವಾಗಿ ಕುಳಿತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು ಅವನನ್ನು ದೃಷ್ಟಿಸಿ ನೋಡಿ - ಇವನು ಸಹ ಅವನ ಸಂಗಡ ಇದ್ದವನು ಅಂದಳು.57ಆದರೆ ಅವನು - ನಾನು ಅವನನ್ನು ಅರಿಯೆನಮ್ಮಾ ಎಂದು ಹೇಳಿದನು.58ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು - ನೀನೂ ಸಹ ಅವರಲ್ಲಿ ಒಬ್ಬನು ಅನ್ನಲು ಪೇತ್ರನು - ನಾನಲ್ಲಪ್ಪಾ ಅಂದನು.59ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು - ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ ಎಂದು ದೃಡವಾಗಿ ಹೇಳಿದನು.60ಆದರೆ ಪೇತ್ರನು - ನೀನು ಹೇಳುವದೇನೋ ನಾನರಿಯೆನಪ್ಪಾ ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು.61ಸ್ವಾಮಿಯು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು - ಈಹೊತ್ತು ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆ ನೆಂಬದಾಗಿ ಹೇಳುವಿ ಎಂದು ಸ್ವಾಮಿ ನುಡಿದ ಮಾತನ್ನು ನೆನಪಿಸಿಕೊಂಡು62ಹೊರಗೆ ಹೋಗಿ ತುಂಬಾ ದುಃಖದಿಂದ ಅತ್ತನು.63ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಹಾಸ್ಯಮಾಡುತ್ತಾ64ಆತನಿಗೆ ಮುಸುಕುಹಾಕಿ ಹೊಡೆದು - ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು ಎಂದು ಆತನನ್ನು ಕೇಳಿದರು.65ಆತನ ಕುರಿತು ಇನ್ನೂ ಅನೇಕ ದೂಷಣೆಯ ಮಾತುಗಳನ್ನಾಡಿದರು.66ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು ಅಂದರೆ ಮಹಾಯಾಜಕರೂ ಶಾಸ್ತ್ರಿಗಳೂ ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು -67ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು ಅಂದರು. ಆತನು ಅವರಿಗೆ - ನಾನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ,68ನಾನು ನಿಮ್ಮನ್ನು ಏನಾದರೂ ಕೇಳಿದರೆ ನೀವು ಉತ್ತರಕೊಡುವದಿಲ್ಲ.69ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು ಎಂದು ಹೇಳಿದನು.70ಆಗ ಎಲ್ಲರು - ಹಾಗಾದರೆ ನೀನು ದೇವರ ಕುಮಾರನೋ ಎಂದು ಕೇಳಲು ಆತನು ಅವರಿಗೆ - ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ ಎಂದು ಹೇಳಿದನು.71ಅದಕ್ಕೆ ಅವರು - ನಮಗೆ ಸಾಕ್ಷಿ ಇನ್ನುಯಾತಕ್ಕೆ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ ಅಂದರು.
23ಪಿಲಾತನು ಯೇಸುವನ್ನು ವಿಚಾರಿಸಿ ಆತನಲ್ಲಿ ಅಪರಾಧವಿಲ್ಲವೆಂದು ಕಂಡರೂ ಆತನಿಗೆ ಮರಣದಂಡನೆಯನ್ನು ವಿಧಿಸಿದ್ದು
(ಮತ್ತಾ. 27. 2,11–31, ಮಾರ್ಕ 15. 1-20, ಯೋಹಾ. 18. 28-19. 16)
1ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಆತನನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋಗಿ –2ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ ಕೈಸರನಿಗೆ ತೆರಿಗೆ ಕೊಡಬಾರದೆಂದು ಬೋಧಿಸುತ್ತಾ ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.3ಪಿಲಾತನು ಯೇಸುವನ್ನು ನೀನು ಯೆಹೂದ್ಯರ ಅರಸನೋ ಎಂದು ಕೇಳಲು, ಆತನು – ನೀನೇ ಹೇಳಿದ್ದೀ ಎಂದು ಉತ್ತರ ಕೊಟ್ಟನು.4ಪಿಲಾತನು ಮಹಾಯಾಜಕರಿಗೂ ಜನರ ಗುಂಪಿಗೂ - ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುತ್ತಿಲ್ಲವೆಂದು ಹೇಳಿದನು.5ಅದಕ್ಕೆ ಅವರು – ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ ಎಂದು ಇನ್ನೂ ಒತ್ತಿ ಹೇಳಿದರು.6ಇದನ್ನು ಪಿಲಾತನು ಕೇಳಿ – ಈ ಮನುಷ್ಯನು ಗಲಿಲಾಯದವನೋ ಎಂದು ವಿಚಾರಿಸಿ.7ಈತನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳಿದುಕೊಂಡು ಯೇಸುವನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿವಸಗಳಲ್ಲಿ ಯೆರೂಸಲೇಮಿನಲ್ಲೇ ಇದ್ದನು.8ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಯಾಕೆಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವುದಾದರೂ ಒಂದು ಸೂಚಕ ಕಾರ್ಯವಾಗುವುದನ್ನು ನೋಡಬೇಕೆಂದು ನಿರೀಕ್ಷಿಸಿದನು.9ಹೆರೋದನು ಅನೇಕ ಮಾತುಗಳಿಂದ ಯೇಸುವನ್ನು ಪ್ರಶ್ನೆ ಮಾಡಿದಾಗ್ಯೂ ಆತನು ಅವನಿಗೆ ಏನೂ ಉತ್ತರ ಕೊಡಲಿಲ್ಲ.10ಮಹಾಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಆತನ ಕುರಿತು ಬಹು ತೀವ್ರವಾಗಿ ಆರೋಪಿಸುತ್ತಿದ್ದರು.11ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.12ಅದೇ ದಿನ ಹೆರೋದನು ಪಿಲಾತನೂ ಒಬ್ಬರಿಗೊಬ್ಬರು ಸ್ನೇಹಿತರಾದರು. ಅದಕ್ಕಿಂತ ಮೊದಲು ಅವರಿಬ್ಬರೂ ವೈರಿಗಳಾಗಿದ್ದರು.13ತರುವಾಯ ಪಿಲಾತನು ಮಹಾಯಾಜಕರನ್ನೂ ಅಧಿಕಾರಿಗಳನ್ನೂ ಪ್ರಜೆಗಳನ್ನೂ ಒಟ್ಟಾಗಿ ಕರಸಿ ಅವರಿಗೆ –14ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.15ಹೆರೋದನು ಈತನನ್ನು ಹಿಂತಿರುಗಿ ನಮ್ಮ ಬಳಿಗೆ ಕಳುಹಿಸಿದನಲ್ಲಾ. ಆದದರಿಂದ ಈತನು ಮರಣದಂಡನೆಗೆ ಯೋಗ್ಯವಾದದ್ದೇನೂ ಮಾಡಿದವನಲ್ಲವೆಂದಾಯಿತು.16ಆದುದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಎಂದು ಹೇಳಿದನು.17ಆದರೆ ಅವರು – ಅವನನ್ನು ಕೊಲ್ಲಿಸು18ನಮಗೆ ಬರಬ್ಬನನ್ನು ಬಿಟ್ಟುಕೊಡು ಎಂದು ಒಟ್ಟಾಗಿ ಕೂಗಿಕೊಂಡರು.19ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದು ದಂಗೆಯ ನಿಮಿತ್ತವಾಗಿಯೂ ಕೊಲೆಯ ನಿಮಿತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು.20ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿದ್ದು ತಿರಿಗಿ ಅವರ ಸಂಗಡ ಮಾತನಾಡಿದನು.21ಆದರೆ ಅವರು – ಅವನನ್ನು ಶಿಲುಬೆಗೆ ಹಾಕಿಸು. ಶಿಲುಬೆಗೆ ಹಾಕಿಸು. ಎಂದು ಕೂಗುತ್ತಿದ್ದರು.22ಅವನು ಮೂರನೆಯ ಸಾರಿ - ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದ್ದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ ಎಂದು ಅವರಿಗೆ ಹೇಳಿದನು.23ಆದರೆ ಅವರು ಜೋರಾಗಿ ಕೂಗುತ್ತಾ - ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು. ಅವರ ಕೂಗಾಟವು ಗೆದ್ದಿತು.24ಆಗ ಪಿಲಾತನು – ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ25ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.ಯೇಸುವನ್ನು ಶಿಲುಬೆಗೆ ಹಾಕಿದ್ದು; ಆತನು ಪ್ರಾಣಬಿಟ್ಟದ್ದು
(ಮತ್ತಾ. 27. 32-56; ಮಾರ್ಕ 15. 21-41; ಯೋಹಾ. 19. 17-30)
26ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆಪಟ್ಟಣದ ಸೀಮೋನನೆಂಬುವನನ್ನು ಕರೆದು ಶಿಲುಬೆಯನ್ನು ಅವನ ಮೇಲೆ ಹೊರೆಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.27ಜನರೂ ಸ್ತ್ರೀಯರೂ ದೊಡ್ಡ ಗುಂಪಾಗಿ ಯೇಸುವಿನ ಹಿಂದೆ ಬಂದರು. ಆ ಸ್ತ್ರೀಯರು ಎದೆಬಡಿದುಕೊಳ್ಳುತ್ತಾ ಯೇಸುವಿನ ಕುರಿತಾಗಿ ಗೋಳಾಡುತ್ತಾ ಇದ್ದರು.28ಯೇಸು ಅವರ ಕಡೆಗೆ ತಿರುಗಿಕೊಂಡು ಯೇರುಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.29ಯಾಕಂದರೆ ಬಂಜೆಯರೂ ಬಸುರಾಗದವರೂ ಮೊಲೆಕುಡಿಸದವರೂ ಧನ್ಯರು ಎಂದು ಜನರು ಹೇಳುವ ದಿವಸಗಳು ಬರುತ್ತವೆ.30ಆ ಕಾಲದಲ್ಲಿ ಜನರು - ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ ಅನ್ನುವರು.31ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣಮರದಗತಿ ಏನಾಗಬಹುದು? ಅಂದನು.32ಆತನ ಸಂಗಡ ಶಿಲುಬೇಗೆರಿಸುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು.33ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನು ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೋಬ್ಬನನ್ನು ಎಡಗಡೆಯಲ್ಲಿಯು ಹಾಕಿದರು.34ಆಗ ಯೇಸು ತಂದೆಯೇ ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬದನ್ನು ಅವರು ಅರಿಯರು ಅಂದನು. ಆ ಮೇಲೆ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿ ಚೀಟು ಹಾಕಿದರು.35ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರಾರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಎಂದು ಗೇಲಿಮಾಡಿದರು.36ಸಿಪಾಯಿಗಳೂ ಆತನನ್ನು ಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ಯವನ್ನು ತೋರಿಸಿ -37ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ ಅಂದರು.38ಇದಲ್ಲದೆ ಆತನ ಶಿಲುಬೆಯ ಮೇಲೆ ‘ಇವನು ಯೆಹೂದ್ಯರ ಅರಸನು’ ಎಂಬುದಾಗಿ ಒಂದು ಪ್ರಕಟಣಾ ಫಲಕವನ್ನು ಹಾಕಲಾಗಿತ್ತು.39ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ – ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು ಎಂದು ಹೇಳಿನು.40ಅದಕ್ಕೆ ಎರಡನೆಯವನು ಅವನನ್ನು ಗದರಿಸಿ – ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವದಿಲ್ಲವೋ?41ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೆವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೆವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ ಎಂದು ಹೇಳಿ,42ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ ಅಂದನು.43ಅದಕ್ಕೆ ಯೇಸು - ‘ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ’ ಎಂದು ಉತ್ತರಕೊಟ್ಟನು.44ಇಷ್ಟರಲ್ಲಿ ಹೆಚ್ಚು ಕಡಿಮೆ ಮದ್ಯಾಹ್ನವಾಯಿತು.45ಸೂರ್ಯನು ಕಾಂತಿಗುಂದಿ ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.46ಆ ಮೇಲೆ ಯೇಸು – ತಂದೆಯೇ ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.47ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ – ಈ ಮನುಷ್ಯನು ನಿಜವಾಗಲೂ ಸತ್ಪುರುಷನೇ ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.48ಇದನ್ನು ನೋಡಲು ಸೇರಿ ಬಂದಿದ್ದ ಜನರೆಲ್ಲರು ನಡೆದ ಘಟನೆಯನ್ನು ನೋಡಿ ಎದೆಬಡಿದುಕೊಳ್ಳುತ್ತಾ ಹಿಂತಿರುಗಿ ಹೋದರು.49ಇದಲ್ಲದೆ ಆತನ ಪರಿಚಿತರೆಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.ಯೇಸುವನ್ನು ಸಮಾಧಿಯಲ್ಲಿ ಇಟ್ಟದ್ದು
(ಮತ್ತಾ. 27. 57-61; ಮಾರ್ಕ 15. 42-47; ಯೋಹಾ. 19. 38-42)
50ಅರಿಮಥಾಯ ಎಂಬುದು ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫ. ಆತನು ಹಿರಿಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು.51ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಇವನು ಅನುಮತಿಸಿರಲಿಲ್ಲ.52ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡು.53ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನು ಇಟ್ಟಿರಲಿಲ್ಲ.54ಆ ದಿನವು ಸೌರಣೆಯ ದಿನವಾಗಿತ್ತು. ಮತ್ತು ಸಬ್ಬತ್ ದಿನ ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು55ಹೀಗಿರುವಲ್ಲಿ ಗಲಿಲಾಯದಿಂದ ಆತನ ಸಂಗಡ ಬಂದಿದ್ದ ಸ್ತ್ರೀಯರು ಜೊತೆಯಲ್ಲಿ ಅವನ ಹಿಂದೆಯೇ ಹೋಗಿ ಆ ಸಮಾಧಿಯನ್ನೂ ಆತನ ದೇಹವನ್ನಿಟ್ಟ ಸ್ಥಳವನ್ನು ನೋಡಿ,56ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು.
24ಯೇಸುವಿನ ಪುನರುತ್ಥಾನವು
(ಮತ್ತಾ. 28. 1-8 ಮಾರ್ಕ 16. 1-18. ಯೋಹಾ. 20. 1-23. 1ಕೊರಿ. 15. 5)
1ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡು ವಾರದ ಮೊದಲನೆಯ ದಿವಸದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು.2ಸಮಾಧಿಗೆ ಮುಚ್ಚಿದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವುದನ್ನು ಕಂಡು ಒಳಕ್ಕೆ ಹೋಗಿ ನೋಡುವಲ್ಲಿ3ಯೇಸು ಸ್ವಾಮಿಯ ದೇಹವು ಅಲ್ಲಿ ಕಾಣಲಿಲ್ಲ.4ಈ ವಿಷಯವಾಗಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಅಕಸ್ಮಾತಾಗಿ ಅವರ ಬಳಿಯಲ್ಲಿ ನಿಂತುಕೊಂಡರು.5ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ – ‘ಸತ್ತವರೊಳಗೆ ಬದುಕಿರುವವನನ್ನು ಹುಡುಕುವದೇನು? ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ.’6-7ಆತನು ಇನ್ನೂ ಗಲಿಲಾಯದಲ್ಲಿದ್ದಾಗ - ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು ಶಿಲುಬೆಗೆ ಹಾಕಲ್ಪಟ್ಟು ಮೂರನೇಯ ದಿನದಲ್ಲಿ ಜೀವಿತನಾಗಿ ಎದ್ದು ಬರುವುದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ ಎಂದು ಹೇಳಿದನು.8ಸ್ತ್ರೀಯರು ಆತನ ಮಾತುಗಳನ್ನು ನೆನಪಿಗೆ ತಂದುಕೊಂಡು,9ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಆ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು.10ಆ ಸ್ತ್ರೀಯರು ಯಾರಂದರೆ ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಇವರೇ. ಇವರ ಜೊತೆಯಲ್ಲಿದ್ದ ಬೇರೆ ಸ್ತ್ರೀಯರು ಸಹ ಅಪೊಸ್ತಲರಿಗೆ ಆ ಸಂಗತಿಗಳನ್ನು ಹೇಳಿದರೂ. ಅವರು ನಂಬಲಿಲ್ಲ.11ಆ ಮಾತುಗಳು ಅವರಿಗೆ ಬರೀ ಹರಟೆಯಾಗಿ ತೋರಿದವು.12ಆದರೆ ಪೇತ್ರನು ಎದ್ದು ಸಮಾಧಿ ಬಳಿ ಓಡಿಹೋಗಿ ಬೊಗ್ಗಿ ನೋಡಿ ನಾರುಬಟ್ಟೆಗಳನ್ನು ಮಾತ್ರ ಕಂಡು ನಡೆದ ಸಂಗತಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟು ಹೋದನು.13ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಆರುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ14ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆಮಾಡುತ್ತಿದ್ದರು.15ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಸಾಗಿದನು.16ಆದರೆ ಅವರು ಆತನ ಗುರುತನ್ನು ಹಿಡಿಯಲಿಲ್ಲ. ಅವರ ಕಣ್ಣು ಕಟ್ಟಿದ ಹಾಗಾಗಿತು.17ಯೇಸುವು – ‘ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತಾಡಿಕೊಳ್ಳುವ ಈ ಸಂಗತಿಗಳೇನು,’ ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು.18ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ – ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿವಸಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ? ಎಂದು ಕೇಳಲು,19ಆತನು ಅವರನ್ನು – ‘ಯಾವ ಸಂಗತಿಗಳು’ ಎಂದು ಕೇಳಿದನು. ಅದಕ್ಕೆ ಅವರು – ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.20ಆತನನ್ನು ಮಹಾಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು.21ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ.22ಆದರೆ ನಮ್ಮಲ್ಲಿ ಕೆಲವು ಮಂದಿ ಸ್ತ್ರೀಯರು ಬೆಳಗಾಗುವಾಗ ಸಮಾಧಿಯ ಬಳಿಗೆ ತೆರಳಿ ಆತನ ದೇಹವನ್ನು ಕಾಣದೇ,23ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ, ಆತನು ಬದುಕಿದ್ದಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು.24ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು. ಆತನನ್ನು ಮಾತ್ರ ಕಾಣಲಿಲ್ಲ. ಎಂದು ಹೇಳಿದರು.25ಯೇಸು ಅವರಿಗೆ – ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,26ಕ್ರಿಸ್ತನು ಇಂಥ ಶ್ರಮಗಳನ್ನು ಅನುಭವಿಸಿ ತನ್ನ ಮಹಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ,27ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.28ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಅವರನ್ನು ದಾಟಿ ಇನ್ನೂ ಮುಂದಕ್ಕೆ ಹೋಗುವವನಂತೆ ಮಾಡಿದನು.29ಆದರೆ ಅವರು – ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂತು ಎಂದು ಆತನಿಗೆ ಹೇಳಿ ಬಲವಂತ ಮಾಡಲು ಆತನು ಅವರ ಕೂಡ ಇರುವುದಕ್ಕೆ ಊರಿನೊಳಗೆ ಹೋದನು.30ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಅವರಿಗೆ ಕೊಡುತ್ತಿರಲಾಗಿ ಅವರ ಕಣ್ಣುಗಳು ತೆರೆದವು. ಆಗ ಅವರು ಆತನ ಗುರುತು ಹಿಡಿದರು.31ಆತನು ಅವರ ಕಣ್ಣಿಗೆ ಕಾಣದಂತೆ ಮಾಯವಾದನು.32ಆಗ ಅವರು ಒಬ್ಬರಿಗೊಬ್ಬರು – ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ? ಎಂದು ಹೇಳಿಕೊಂಡು33ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂತಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಾಗಿ ಕೂಡಿಕೊಂಡಿದ್ದು,34ಸ್ವಾಮಿ ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು ಎಂದು ಹೇಳುತ್ತಿದ್ದರು.35ಇದನ್ನು ಕಂಡು ಅವರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವುದರಲ್ಲಿ ತಾವು ಆತನ ಗುರುತು ಹಿಡಿದೆವೆಂಬದನ್ನೂ ವಿವರಿಸಿದರು.36ಅವರು ಈ ಸಂಗತಿಗಳನ್ನು ಕುರಿತು ಮಾತಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು ‘ನಿಮಗೆ ಮನಶಾಂತಿಯಾಗಲಿ’; ಎಂದು ಅವರಿಗೆ ಹೇಳಿದನು.37ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದನ್ನು ಭೂತವೆಂದು ಭಾವಿಸಿದರು.38ಆತನು ಅವರಿಗೆ – ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಅನುಮಾನಗಳು ಹುಟ್ಟುವುದೇಕೆ? ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ.39ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ ಎಂದು ಹೇಳಿದನು.40ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು.41ಆದರೆ ಅವರು ಸಂತೋಷ ಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು – ತಿನ್ನತಕ್ಕ ಪದಾರ್ಥವೇನಾದರೂ ನಿಮಲ್ಲುoಟೋ ಎಂದು ಅವರನ್ನು ಕೇಳಲು42ಅವರು ಸುಟ್ಟ ಮೀನಿನ ಒಂದು ತುಂಡನ್ನು ಆತನಿಗೆ ಕೊಟ್ಟರು.43ಆತನು ಅದನ್ನು ತೆಗೆದುಕೊಂಡು ಅವರ ಮುಂದೆ ತಿಂದನು.44ತರುವಾಯ ಯೇಸುವು – ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ? ಅಂದನು.45ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳುಕೊಳ್ಳುವಂತೆ ಆತನು ಅವರಿಗೆ ಜ್ಞಾನವನ್ನೂ ಅನುಗ್ರಹಿಸಿದನು,46ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ಯೇಸು ಕ್ರಿಸ್ತನು ಕಷ್ಟ ಪಟ್ಟು ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,47ಅದಲ್ಲದೆ ಜನರು ಪಾಪಪರಿಹಾರಕ್ಕೋಸ್ಕರ ಪಶ್ಚಾತ್ತಾಪಟ್ಟು, ಪಾಪಕ್ಕೆ ವಿಮುಖರಾಗಿ, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕೆಂತಲೂ ಬರೆದದೆ.48ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ.49ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ,” ಎಂದು ಹೇಳಿದನು.ಯೇಸುವಿನ ಸ್ವರ್ಗಾರೋಹಣವು
(ಮಾರ್ಕ 16. 19. 20; ಅ. ಕೃ. 1. 4 -14)
50ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.51ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು.52ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ53ನಿರಂತರವಾಗಿ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.
ಯೋಹಾನನು ಬರೆದ ಸುವಾರ್ತೆ
1ಅನಾದಿಯಿಂದ ಇದ್ದ ದೇವರ ವಾಕ್ಯವು ಸಂಪೂರ್ಣ ಮನುಷ್ಯನಾಗಿದ್ದು
1 ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.2ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು.3ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.4ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.5 ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ.6ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು.7ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.8ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು.9ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.10ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ.11ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ.12ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.13ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.14ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.15ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ << <ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು> ಎಂದು ನಾನು ಹೇಳಿದಾತನು ಈತನೇ>> ಎಂದು ಘೋಷಿಸಿದನು.16ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.17ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.18ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.ಸ್ನಾನಿಕನಾದ ಯೋಹಾನನು ಯೇಸುವಿನ ವಿಷಯವಾಗಿ ಸಾಕ್ಷಿ ಹೇಳಿದ್ದು
19ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, <<ನೀನು ಯಾರು?>> ಎಂದು ಕೇಳಿದ್ದಕ್ಕೆ,20ಅವನು ಮರೆಮಾಡದೆ ಎಲ್ಲರ ಮುಂದೆ, <<ನಾನು ಕ್ರಿಸ್ತನಲ್ಲ,>> ಎಂದು ಹೇಳಿದನು.21ಅದಕ್ಕೆ ಅವರು, <<ಹಾಗಾದರೆ ನೀನು ಯಾರು? ಎಲೀಯನೋ?>> ಎಂದು ಕೇಳಿದರು. ಅದಕ್ಕೆ ಅವನು, <<ನಾನು ಎಲೀಯನಲ್ಲ>> ಅಂದನು. <<ನೀನು ಬರಬೇಕಾದ ಆ ಪ್ರವಾದಿಯೋ?>> ಎಂದು ಕೇಳಿದ್ದಕ್ಕೆ <<ಅಲ್ಲ,>> ಅಂದನು.22ಆಗ ಅವರು, <<ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?>> ಎಂದು ಕೇಳಿದರು.23ಅದಕ್ಕೆ ಯೋಹಾನನು, <<ಪ್ರವಾದಿಯಾದ ಯೆಶಾಯನು ಹೇಳಿದಂತೆ, <ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು> >> ಎಂದು ಉತ್ತರ ಕೊಟ್ಟನು.24ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು.25ಅವರು ಅವನಿಗೆ, <<ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?>> ಎಂದು ಪ್ರಶ್ನಿಸಿದರು.26ಅದಕ್ಕೆ ಯೋಹಾನನು, <<ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿದ್ದಾನೆ.27ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ>> ಅಂದನು.28ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಉರಿನಲ್ಲಿ ನಡೆಯಿತು.29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, <<ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.30<ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು> ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ.31ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.>>32ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, <<ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.33ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು <ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು> ಎಂದು ತಾನೇ ನನಗೆ ಹೇಳಿದನು.34ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ>> ಎಂದು ಹೇಳಿದನು.ಯೇಸುವಿನ ಪ್ರಥಮ ಶಿಷ್ಯರು
35ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು,36ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, <<ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ>> ಎಂದು ಹೇಳಿದನು.37ಆ ಇಬ್ಬರು ಶಿಷ್ಯರು ಯೋಹಾನನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು.38ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, <<ನಿಮಗೆ ಏನು ಬೇಕು?>> ಎಂದು ಕೇಳಲು ಅವರು, <<ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?>> ಎಂದು ಕೇಳಿದರು.39ಆತನು ಅವರಿಗೆ, <<ನೀವೇ ಬಂದು ನೋಡಿರಿ>> ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ ಸಂಜೆ ನಾಲ್ಕು ಗಂಟೆಯಾಗಿತ್ತು.40ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು.41ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ <<ನಾವು ಮೆಸ್ಸೀಯನನ್ನು ಕಂಡುಕೊಂಡೆವು>> (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ,42ಅವನನ್ನು ಯೇಸುವಿನ ಬಳಿಗೆ ಕರದುಕೊಂಡು ಬಂದನು. ಯೇಸು ಅವನನ್ನು ನೋಡಿ <<ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ>> ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)43ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, <<ನನ್ನನ್ನು ಹಿಂಬಾಲಿಸು>> ಎಂದನು.44ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು.45ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ <<ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆಯುತ್ತಿದ್ದರೋ, ಯೋಸೇಫನ ಮಗನಾದ ನಜರೇತಿನ ಯೇಸುವನ್ನು ನಾವು ಕಂಡೆವು>> ಎಂದು ಹೇಳಿದನು.46ನತಾನಯೇಲನು <<ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?>> ಎಂದು ಕೇಳಲು, ಫಿಲಿಪ್ಪನು <<ಬಂದು ನೋಡು,>> ಅಂದನು.47ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು <<ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ>> ಎಂದು ಹೇಳಿದನು.48ಅದಕ್ಕೆ ನತಾನಯೇಲನು <<ನೀನು ನನ್ನನ್ನು ಹೇಗೆ ಬಲ್ಲೆ?>> ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು <<ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು>> ಎಂದು ಹೇಳಿದನು.49ಅದಕ್ಕೆ ನತಾನಯೇಲನು, <<ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು>> ಎಂದನು.50ಅದಕ್ಕೆ ಯೇಸು <<ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,>> ಎಂದನು.51ಯೇಸು <<ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ>> ಎಂದು ಹೇಳಿದನು.
2ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯ
1ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.2ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.3ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ <<ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ>> ಎಂದು ತಿಳಿದಳು.4ಯೇಸು ಆಕೆಗೆ <<ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ>> ಎಂದು ಉತ್ತರಕೊಟ್ಟನು.5ಆತನ ತಾಯಿಯು ಸೇವಕರಿಗೆ <<ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ>> ಎಂದಳು.6ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.7ಯೇಸು ಅವರಿಗೆ, <<ಆ ಬಾನೆಗಳಲ್ಲಿ ನೀರು ತುಂಬಿರಿ>> ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.8ಅನಂತರ ಆತನು ಸೇವಕರಿಗೆ, <<ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ>> ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು.9ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,10<<ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ>> ಎಂದನು.11ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.ಯೇಸು ದೇವಾಲಯದಲ್ಲಿ ವ್ಯಾಪಾರವನ್ನು ನಿಲ್ಲಿಸಿದ್ದು
12ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿವಸ ಇದ್ದರು.13ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.14ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು.15ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.16ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ <<ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ>> ಎಂದು ಗದರಿಸಿದನು.17ಆಗ <<ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ>> ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.18ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ <<ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?>> ಎಂದು ಕೇಳಿದರು.19ಅದಕ್ಕೆ ಯೇಸು <<ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು>> ಎಂದು ಉತ್ತರಕೊಟ್ಟನು.20ಅದಕ್ಕೆ ಯೆಹೂದ್ಯರು, <<ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?>> ಎಂದರು.21ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು.22ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.ಯೇಸು ಒಬ್ಬ ಶಾಸ್ತ್ರಿಗೆ ಪುನರ್ಜನ್ಮದ ವಿಷಯವಾಗಿ ಉಪದೇಶ ಮಾಡಿದ್ದು
23ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.24ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ,25ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.
3ಹೊಸದಾಗಿ ಹುಟ್ಟುವುದು
1ಫರಿಸಾಯರಲ್ಲಿ ನಿಕೊದೇಮನೆಂಬ ಯೆಹೂದ್ಯರ ಧಾರ್ಮಿಕ ಆಡಳಿತ ಮಂಡಳಿಯ ಒಬ್ಬ ಸದಸ್ಯನಾಗಿದ್ದ.2ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, <<ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು>> ಎಂದು ಹೇಳಿದನು.3ಯೇಸು ಅವನಿಗೆ, <<ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು>>, ಎಂದು ಉತ್ತರ ಕೊಟ್ಟನು.4ನಿಕೊದೇಮನು ಆತನನ್ನು, <<ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?>> ಎಂದು ಕೇಳಿದನು.5ಅದಕ್ಕೆ ಯೇಸು <<ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.6ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.7<ನೀವು ಹೊಸದಾಗಿ ಹುಟ್ಟಬೇಕು> ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ8ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ>> ಎಂದನು.9ಅದಕ್ಕೆ ನಿಕೊದೇಮನು <<ಇದೆಲ್ಲಾ ಹೇಗೆ ಸಾಧ್ಯ?>> ಎಂದಾಗ,10ಯೇಸು ಅವನಿಗೆ ಹೇಳಿದ್ದೇನಂದರೆ, <<ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?11ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.12ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?13 ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.14ಇದಲ್ಲದೆ ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.15ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು.16<<ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.17ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.18ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.19ಆ ತೀರ್ಪು ಏನೆಂದರೆ ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.20ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.21ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.>>ಸ್ನಾನಿಕನಾದ ಯೋಹಾನನು ಯೇಸುವಿನ ವಿಷಯವಾಗಿ ಪುನಃ ಸಾಕ್ಷಿ ಹೇಳಿದ್ದು
22ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತಿದ್ದನು.23ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.24ಆಗ ಇನ್ನೂ ಯೋಹಾನನ್ನು ಸೆರೆಮನೆಯಲ್ಲಿ ಹಾಕಿರಲಿಲ್ಲ.25ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.26ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ <<ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.>> ಎಂದು ಹೇಳಲು27ಯೋಹಾನನು <<ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.28 <ನಾನು ಕ್ರಿಸ್ತನಲ್ಲ,> ಆದರೆ <ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ> ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.29ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.30ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು.31 ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.32ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.33ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.34ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.35ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.36ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.>>
4ಯೇಸು ಸಮಾರ್ಯ ಸ್ತ್ರೀಯ ಸಂಗಡ ಸಂಭಾಷಣೆ ಮಾಡಿದ್ದು
1ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,2(ಆದರೆ ಯೇಸು ತಾನೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಆತನ ಶಿಷ್ಯರೇ ಮಾಡಿಸುತ್ತಿದ್ದರು),3ಆತನು ಯೂದಾಯವನ್ನು ಬಿಟ್ಟು ತಿರುಗಿ ಗಲಿಲಾಯಕ್ಕೆ ಹೊರಟು ಹೋದನು.4ಆತನು ಸಮಾರ್ಯ ಸೀಮೆಯನ್ನು ಹಾದುಹೋಗಬೇಕಾಯಿತು.5ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು.6ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.7ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು <<ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,>> ಎಂದು ಕೇಳಿದನು.8ಅಷ್ಟರಲ್ಲಿ ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವುದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು.9ಆ ಸಮಾರ್ಯದ ಸ್ತ್ರೀಯು ಆತನಿಗೆ, <<ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?>> ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ.10ಅದಕ್ಕೆ ಯೇಸು <<ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು>> ಅಂದನು.11ಆ ಸ್ತ್ರೀ ಆತನಿಗೆ, <<ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು?12ನಮ್ಮ ಹಿರಿಯವನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು. ಅವನೂ ಅವನ ಮಕ್ಕಳೂ ಅವನ ಜಾನುವಾರುಗಳೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದಿದ್ದರು>> ಅನ್ನಲು,13ಯೇಸು ಆಕೆಗೆ, <<ಈ ನೀರನ್ನು ಕುಡಿಯುವವರೆಲ್ಲರಿಗೆ ಪುನಃ ನೀರಡಿಕೆಯಾಗುವುದು,14ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು>> ಎಂದು ಹೇಳಿದನು.15ಆ ಸ್ತ್ರೀಯು, <<ಅಯ್ಯಾ, ನನಗೆ ಆ ನೀರನ್ನು ಕೊಡು, ಕೊಟ್ಟರೆ ಇನ್ನು ಮೇಲೆ ನನಗೆ ನೀರಡಿಕೆಯಾಗುವುದಿಲ್ಲ. ನೀರು ಸೇದುವುದಕ್ಕೆ ಇಷ್ಟು ದೂರ ಬರಬೇಕಾಗಿರುವುದಿಲ್ಲ>> ಅನ್ನಲು,16ಯೇಸು ಆಕೆಗೆ <<ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರೆದುಕೊಂಡು ಬಾ>> ಎಂದು ಹೇಳಿದನು.17ಅದಕ್ಕೆ ಆ ಸ್ತ್ರೀಯು <<ನನಗೆ ಗಂಡನಿಲ್ಲ>> ಎಂದಳು. ಯೇಸು ಆಕೆಗೆ, <<ನನಗೆ ಗಂಡನಿಲ್ಲವೆಂದು ನೀನು ಹೇಳಿದ್ದು ಸರಿಯೇ.18ನಿನಗೆ ಐದು ಮಂದಿ ಗಂಡಂದಿರಿದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ>> ಎಂದನು.19ಆ ಸ್ತ್ರೀ ಆತನಿಗೆ, <<ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ.20ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹುದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ>> ಎಂದಳು.21ಯೇಸು ಆಕೆಗೆ <<ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರುಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.22ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತಿರಾ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.23ಅದಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.24ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ>> ಎಂದನು.25ಆ ಹೆಂಗಸು ಆತನಿಗೆ <<ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು>> ಎಂದು ಹೇಳಲು,26ಯೇಸು ಆಕೆಗೆ <<ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು>> ಎಂದು ಹೇಳಿದನು.27ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, <<ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?>> ಎಂದು ಒಬ್ಬರೂ ಆತನನ್ನು ಕೇಳಲಿಲ್ಲ.28ಆಗ ಆ ಸ್ತ್ರೀ ತನ್ನ ನೀರಿನ ಕೊಡವನ್ನು ಅಲ್ಲೇ ಬಿಟ್ಟು ಊರೊಳಕ್ಕೆ ಹೋಗಿ ಜನರಿಗೆ,29 <<ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?>> ಎಂದು ಹೇಳಿದಳು.30ಆಗ ಅವರೆಲ್ಲರು ಊರನ್ನು ಬಿಟ್ಟು ಆತನ ಬಳಿಗೆ ಬಂದರು.31ಅಷ್ಟರೊಳಗೆ ಶಿಷ್ಯರು <<ಗುರುವೇ, ಊಟಮಾಡು>> ಎಂದು ಆತನನ್ನು ಕೇಳಿಕೊಂಡರು.32ಆದರೆ ಆತನು ಅವರಿಗೆ <<ನಿಮಗೆ ತಿಳಿಯದಿರುವ ಆಹಾರವು ನನ್ನ ಬಳಿಯಲ್ಲಿ ಉಂಟು>> ಎಂದು ಹೇಳಲು33ಶಿಷ್ಯರು, <<ಆತನಿಗೆ ಯಾರಾದರೂ ಊಟಕ್ಕೆ ತಂದು ಕೊಟ್ಟರೇನೊ?>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.34ಯೇಸು ಅವರಿಗೆ <<ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.35<ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ>? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.36ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.37<ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು> ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ.38ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ>> ಎಂದು ಹೇಳಿದನು.39<<ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದ>> ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.40ಆದುದರಿಂದ ಆ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿವಸ ಅಲ್ಲಿಯೇ ತಂಗಿದನು.41ಇನ್ನೂ ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿದರು,42ಜನರು ಆ ಸ್ತ್ರೀಗೆ, <<ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ>> ಎಂದರು.ಯೇಸು ಒಬ್ಬ ಅಧಿಕಾರಿಯ ಮಗನನ್ನು ಸ್ವಸ್ಥಮಾಡಿದ್ದು
43ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.44ಏಕೆಂದರೆ ಪ್ರವಾದಿಗೆ ಸ್ವಂತದೇಶದಲ್ಲಿ ಗೌರವವಿಲ್ಲವೆಂದು ಯೇಸು ತಾನೇ ಹೇಳಿದ್ದನು.45ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು.46ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.47ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿಯಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, <<ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು>> ಎಂದು ಬೇಡಿಕೊಂಡನು.48ಯೇಸು ಅವನಿಗೆ <<ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ>> ಎಂದು ಹೇಳಿದನು.49ಆ ಅರಮನೆಯ ಅಧಿಕಾರಿಯು <<ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು>> ಅನ್ನಲು50ಯೇಸು ಅವನಿಗೆ <<ಹೋಗು ನಿನ್ನ ಮಗನು ಬದುಕುತ್ತಾನೆ>> ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು.51ಅವನು ಇನ್ನೂ ಘಟ್ಟ ಇಳಿದು ಹೋಗುತ್ತಿರುವಾಗಲೇ ಅವನ ಆಳುಗಳು ಅವನೆದುರಿಗೆ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು.52ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, <<ನಿನ್ನೆ ಮಧ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು>> ಎಂದರು.53ಆಗ <<ನಿನ್ನ ಮಗನು ಬದುಕುತ್ತಾನೆ>> ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.54ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.
5ಯೇಸು ಸಬ್ಬತ್ ದಿನದಲ್ಲಿ ಒಬ್ಬ ರೋಗಿಯನ್ನು ಸ್ವಸ್ಥಮಾಡಿದ್ದರಿಂದ ಯೆಹೂದ್ಯರು ಆತನನ್ನು ವಿರೋಧಿಸಿದ್ದು
1ಇದಾದ ಮೇಲೆ ಯೆಹೂದ್ಯರ ಒಂದು ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು.2ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ.3-4ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.)5ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು.6ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ <<ನಿನಗೆ ಗುಣಹೊಂದಲು ಮನಸ್ಸಿದೆಯೋ?>> ಎಂದು ಕೇಳಿದನು.7ಅದಕ್ಕೆ ಆ ರೋಗಿಯು <<ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ>> ಎಂದನು.8ಯೇಸು ಅವನಿಗೆ, <<ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ>> ಎಂದು ಹೇಳಿದನು.9ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು,10ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, <<ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು>> ಹೇಳಿದ್ದಕ್ಕೆ,11ಅವನು, <<ನನ್ನನ್ನು ಸ್ವಸ್ಥಮಾಡಿದವನೇ <ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ> ಎಂದು ನನಗೆ ಹೇಳಿದನು>> ಎಂದನು.12ಅದಕ್ಕೆ ಯೆಹೂದ್ಯರು ಅವನಿಗೆ, <<ಅದನ್ನು ಎತ್ತಿಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು?>> ಎಂದು ಕೇಳಿದರು.13ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮದ್ಯದಲ್ಲಿ ಮರೆಯಾದನು.14ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, <<ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು>> ಎಂದನು.15ಆ ಮನುಷ್ಯನು ಅಲ್ಲಿಂದ ಹೋಗಿ, ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.16ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.17ಅದಕ್ಕೆ ಯೇಸು ಅವರಿಗೆ, <<ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ>> ಎಂದು ಹೇಳಿದನು.18ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು.ದೇವಕುಮಾರನ ಅಧಿಕಾರವನ್ನು ಮತ್ತು ಆತನಿಗಿರುವ ಸಾಕ್ಷಿಯನ್ನು ಕುರಿತು ಯೇಸು ಮಾಡಿದ ಉಪದೇಶ
19ಯೇಸು ಅವರಿಗೆ, <<ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ.20ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ.22ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ.23ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.24ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.25ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.26ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.27ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ.28ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ,29ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.30<<ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.31ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.32ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.33ನೀವು ಯೋಹಾನನ ಬಳಿಗೆ ದೂತರನ್ನು ಕೇಳಿಕೊಂಡು ಬರುವುದಕ್ಕೆ ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು.34ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.35ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.36ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.37ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ.38ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಆತನು ಕಳುಹಿಸಿದಾತನನ್ನು ನೀವು ನಂಬದೇ ಇದ್ದೀರಿ.39 ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರ?. ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.40ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ.41<<ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ,42ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ.43ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ.44ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?45ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ!46ಅವನು ನನ್ನ ವಿಷಯವಾಗಿ ಬರೆದನು, ಆದುದರಿಂದ ನೀವು ಮೋಶೆಯನ್ನೂ ನಂಬುವವರಾಗಿದ್ದರೆ ನನ್ನನ್ನೂ ನಂಬುತ್ತಿದ್ದಿರಿ.47ಅವನು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬುವಿರಿ?>> ಎಂದನು.
6ಯೇಸು ಐದು ಸಾವಿರ ಜನರಿಗೆ ಊಟ ಕೊಟ್ಟಿದು
(ಮತ್ತಾ. 14:13-21; ಮಾರ್ಕ 6:30-44; ಲೂಕ 9:10-17)
1ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ.2ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು.3ಆದರೆ ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕುಳಿತುಕೊಂಡನು.4ಆಗ ಯೆಹೂದ್ಯರ ಪಸ್ಕದ ಹಬ್ಬವು ಹತ್ತಿರವಾಗಿತ್ತು.5ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಜನರ ದೊಡ್ಡಗುಂಪು ತನ್ನ ಕಡೆಗೆ ಬರುವುದನ್ನು ನೋಡಿ <<ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡು ತರೋಣ?>> ಎಂದು ಫಿಲಿಪ್ಪನನ್ನು ಕೇಳಿದನು.6ತಾನು ಮಾಡಲಿದ್ದಕಾರ್ಯ ಯೇಸುವಿಗೆ ತಿಳಿದಿದ್ದರೂ, ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ, ಆ ಪ್ರಶ್ನೆಯನ್ನು ಕೇಳಿದನು.7ಅದಕ್ಕೆ ಫಿಲಿಪ್ಪನು, <<ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ>> ಎಂದನು.8ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ;9<<ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?>> ಎಂದು ಹೇಳಲು,10ಯೇಸು <<ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ>> ಎಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು.11ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.12ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, <<ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು>> ಎಂದು ಹೇಳಿದನು.13ಅವರು ಆ ಐದು ಜವೆಗೋದಿಯ ರೊಟ್ಟಿಗಳಲ್ಲಿ ಜನರು ತಿಂದು ಮಿಕ್ಕ ತುಂಡುಗಳನ್ನು ಕೂಡಿಸಿ, ಹನ್ನೆರಡು ಪುಟ್ಟಿಗಳಿಗೆ ತುಂಬಿಸಿದರು.14ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, <<ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ>> ಎಂದು ಹೇಳಿಕೊಂಡರು.15ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು.ನೀರಿನ ಮೇಲೆ ನಡೆದದ್ದು;
(ಮತ್ತಾ. 14:22-33; ಮಾರ್ಕ 6:45-52)
16ಸಂಜೆಯಾದಾಗ ಆತನ ಶಿಷ್ಯರು ಸಮುದ್ರದ ದಡಕ್ಕೆ ಬಂದು,17ದೋಣಿಯನ್ನು ಹತ್ತಿ, ಸಮುದ್ರ ಮಾರ್ಗವಾಗಿ ಕಪೆರ್ನೌಮಿನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಆದರೆ ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.18ಬಿರುಗಾಳಿ ಬೀಸುತ್ತಿದ್ದುದರಿಂದ ಸಮುದ್ರವು ಅಲ್ಲೋಲಕಲ್ಲೋಲವಾಯಿತು.19ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು.20ಆದರೆ ಯೇಸು ಅವರಿಗೆ, <<ಭಯಪಡಬೇಡಿರಿ, ನಾನೇ!>> ಎಂದನು.21ಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಆ ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು.ಯೇಸು ತಾನೇ ಜೀವಕರವಾದ ರೊಟ್ಟಿ ಎಂದದ್ದು
22ಮರುದಿನ ಸಮುದ್ರದ ಆಚೇಕಡೆಯಲ್ಲಿ ನಿಂತಿದ್ದ ಜನರು ಅಲ್ಲಿ ಒಂದೇ ದೋಣಿ ಲಭ್ಯವಿದೆ ಇದೆ, ಮತ್ತು ಯೇಸು ತನ್ನ ಶಿಷ್ಯರ ಸಂಗಡ ಆ ದೋಣಿಯಲ್ಲಿ ಹತ್ತಲಿಲ್ಲವೆಂದೂ ಅವರಿಗೆ ಅರಿವಾಯಿತು. ಏಕೆಂದರೆ, ಶಿಷ್ಯರು ಮಾತ್ರ ಆ ದೋಣಿಯಲ್ಲಿ ಪ್ರಯಾಣಿಸಿದ್ದರು.23ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.24ಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.25ಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು <<ಗುರುವೇ, ಯಾವಾಗ ಇಲ್ಲಿಗೆ ಬಂದಿ?>> ಎಂದು ಕೇಳಿದರು.26ಯೇಸು ಅವರಿಗೆ <<ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.27ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ>> ಎಂದನು.28ಅವರು ಆತನಿಗೆ <<ದೇವರ ಕ್ರಿಯೆಗಳನ್ನು ನಾವು ಮಾಡಬೇಕಾದರೆ ಏನು ಮಾಡಬೇಕೆಂದು>> ಕೇಳಿದ್ದಕ್ಕೆ,29ಯೇಸುವು,<<ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ>> ಎಂದನು.30ಅವರು ಆತನನ್ನು<<ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕಕಾರ್ಯ ಮಾಡುತ್ತೀ? ನೀನು ಏನುಮಾಡುತ್ತಿ?31ನಮ್ಮ ಪಿತೃಗಳು ಅರಣ್ಯದಲ್ಲಿ ಮನ್ನಾ ತಿಂದರು. <ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವುದಕ್ಕೆ ಕೊಟ್ಟನು> ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲಾ>> ಎಂದು ಕೇಳಿದಾಗ,32ಯೇಸು ಅವರಿಗೆ <<ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.33ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ>> ಎಂದು ಹೇಳಿದನು.34ಆಗ ಅವರು <<ಆಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು>> ಎಂದರು.35ಯೇಸು ಅವರಿಗೆ <<ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂ ಬಾಯಾರಿಕೆಯಾಗುವುದಿಲ್ಲ.36ಆದರೆ ನೀವು ನನ್ನನ್ನು ನೋಡಿದ್ದರೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.37ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.38ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.39ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.40ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು>> ಎಂದು ಹೇಳಿದನು.41ಆತನು, <<ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ>> ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗೊಣಗುಟ್ಟಿ,42<<ಈತನು ಯೋಸೇಫನ ಮಗನಾದ ಯೇಸು ಅಲ್ಲವೇ? ಈತನ ತಂದೆ ತಾಯಿಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ, <ನಾನು ಪರಲೋಕದಿಂದ ಇಳಿದು ಬಂದೆನು> ಎಂದು ಈತನು ಹೇಳುವುದಾದರೂ ಹೇಗೆ?>> ಎಂದರು.43ಅದಕ್ಕೆ ಯೇಸು ಅವರಿಗೆ, <<ನಿಮ್ಮ ನಿಮ್ಮೊಳಗೆ ಗೊಣಗುಟ್ಟುವುದನ್ನು ನಿಲ್ಲಿಸಿರಿ>> ಎಂದು ಉತ್ತರ ಕೊಟ್ಟನು.44<<ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.45 <ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು> ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.46ದೇವರಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆಯೇ ಹೊರತು ಮತ್ಯಾರು ತಂದೆಯನ್ನು ನೋಡಿಲ್ಲ; ಆತನೊಬ್ಬನೇ ತಂದೆಯನ್ನು ನೋಡಿದವನು.47ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.48ನಾನೇ ಜೀವದ ರೊಟ್ಟಿ49ನಿಮ್ಮ ಪಿತೃಗಳು ಅಡವಿಯಲ್ಲಿ ಮನ್ನಾ ತಿಂದರೂ ಸತ್ತು ಹೋದರು.50ಪರಲೋಕದಿಂದ ಇಳಿದು ಬರುವಂಥ ಆ ರೊಟ್ಟಿ, ಎಂಥದೆಂದರೆ ಅದನ್ನು ತಿಂದವನು ಎಂದಿಗೂ ಸಾಯುವುದಿಲ್ಲ.51ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು>> ಎಂದು ಹೇಳಿದನು.52ಆಗ ಯೆಹೂದ್ಯರು, <<ಈ ಮನುಷ್ಯನು ತನ್ನ ದೇಹವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೇ?>> ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡಲು ಪ್ರಾರಂಭಿಸಿದರು.53ಅದಕ್ಕೆ ಯೇಸು ಅವರಿಗೆ, <<ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.54ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.55ಏಕೆಂದರೆ ನನ್ನ ದೇಹವೇ ನಿಜವಾದ ಆಹಾರವೂ ಮತ್ತು ನನ್ನ ರಕ್ತವೇ ನಿಜವಾದ ಪಾನವೂ ಆಗಿದೆ.56ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.57ಜೀವವುಳ್ಳ ತಂದೆಯು ನನ್ನನ್ನು ಅದಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು.58ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪಿತೃಗಳು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು>> ಎಂದು ಹೇಳಿದನು.59ಈ ವಿಷಯಗಳನ್ನು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು.60ಯೇಸುವಿನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ <<ಇದು ಕಠಿಣವಾದ ಮಾತು, ಇದನ್ನು ಪಾಲಿಸುವವರು ಯಾರು?>> ಎಂದು ಮಾತಾಡಿಕೊಂಡರು.61ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ <<ಈ ಮಾತಿನಿಂದ ನಿಮಗೆ ಬೇಸರವಾಯಿತೋ?62ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?63ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.64ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ>> ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.65ಆತನು ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ, ಎಂದನು.66ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.67ಆದಕಾರಣ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯಂದಿರಿಗೆ <<ನೀವು ಸಹ ಹೋಗಬೇಕೆಂದು ಇದ್ದೀರಾ?>> ಎಂದು ಕೇಳಿದ್ದಕ್ಕೆ,68ಸೀಮೋನ್ ಪೇತ್ರನು ಆತನಿಗೆ <<ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.69ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ>> ಎಂದನು.70ಅದಕ್ಕೆ ಯೇಸು <<ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ>> ಎಂದನು.71ಈ ಮಾತು, ಆತನು ಸೀಮೋನ್ ಇಸ್ಕರಿಯೋತನ ಮಗನಾದ ಯೂದನ ವಿಷಯವಾಗಿ ಹೇಳಿದನು, ಏಕೆಂದರೆ, ಅವನು ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು, ಅವನೇ ಆತನನ್ನು ಹಿಡಿದು ಕೊಡುವುದಕ್ಕಿದ್ದನು.
7ಗುಡಾರಗಳ ಹಬ್ಬದಲ್ಲಿ ಯೇಸುವಿನ ಉಪದೇಶ
1ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ.2ಈಗ ಯೆಹೂದ್ಯರ ಗುಡಾರಗಳ ಹಬ್ಬವು ಸಮೀಪವಾಗಿತ್ತು,3ಆದುದರಿಂದ ಆತನ ಸಹೋದರರು ಆತನಿಗೆ <<ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು.4ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ>> ಎಂದು ಹೇಳಿದರು.5ಏಕೆಂದರೆ ಆತನ ಸಹೋದರರು ಸಹ ಆತನನ್ನು ನಂಬಲಿಲ್ಲ.6ಅದಕ್ಕೆ ಯೇಸು ಅವರಿಗೆ, <<ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.7ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.8ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ>> ಎಂದು ಹೇಳಿದನು.9ಇದನ್ನು ಹೇಳಿದ ಮೇಲೆ ಆತನು ಗಲಿಲಾಯದಲ್ಲಿಯೇ ಉಳಿದುಕೊಂಡನು.10ಆದರೆ ಆತನ ಸಹೋದರರು ಹೋದ ಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ, ರಹಸ್ಯವಾಗಿ ಹೋದನು.11ಆ ಹಬ್ಬದಲ್ಲಿ ಯೆಹೂದ್ಯರು, <<ಆ ಮನುಷ್ಯನು ಎಲ್ಲಿ?>> ಎಂದು ಹುಡುಕುತ್ತಿದ್ದರು.12ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು <<ಆತನು ಒಳ್ಳೆಯ ಮನುಷ್ಯನು>> ಎಂದರು, ಇನ್ನು ಕೆಲವರು <<ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ>> ಎಂದರು.13ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಬಹಿರಂಗವಾಗಿ ಮಾತನಾಡಲಿಲ್ಲ.14ಹಬ್ಬದ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸ ತೊಡಗಿದನು.15ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, <<ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?>> ಎಂದರು.16ಅದಕ್ಕೆ ಯೇಸು <<ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ.17ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.18ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.19ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?>> ಎಂದು ಕೇಳಿದನು.20ಅದಕ್ಕೆ ಆ ಜನರು, <<ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?>> ಎಂದರು.21ಯೇಸು ಅವರಿಗೆ <<ನಾನು ಒಂದು ಸೂಚಕ ಕಾರ್ಯವನ್ನು ಮಾಡಿದೆನು, ಅದಕ್ಕೆ ನೀವೆಲ್ಲರೂ ಬೆರಗಾಗಿದ್ದೀರಿ.22 ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.23ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?24ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ>> ಎಂದನು.25ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು <<ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?26ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?27ಆದರೆ ಇವನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು, ಕ್ರಿಸ್ತನು ಬರುವಾಗ ಆತನು ಎಲ್ಲಿಂದ ಬಂದವನೆಂದು ಒಬ್ಬರಿಗೂ ತಿಳಿಯುವುದಿಲ್ಲವೆಂದು ಮಾತನಾಡಿಕೊಳ್ಳುತ್ತಿದ್ದರು.>>28ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, <<ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.29ಆದರೆ ನಾನು ಆತನನ್ನು ಬಲ್ಲೆನು ಏಕೆಂದರೆ, ನಾನು ಆತನ ಕಡೆಯಿಂದ ಬಂದವನು ಮತ್ತು ಆತನೇ ನನ್ನನ್ನು ಕಳುಹಿಸಿದನು>> ಎಂದು ಕೂಗಿ ಹೇಳಿದನು.30ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.31ಜನರಲ್ಲಿ ಅನೇಕರು ಆತನನ್ನು ನಂಬಿ, <<ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?>> ಎಂದು ಹೇಳಿದರು.ಅಧಿಕಾರಿಗಳು ಆತನನ್ನು ಹಿಡಿಯುವುದಕ್ಕೆ ಪ್ರಯತ್ನಮಾಡಿದ್ದು
32ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು.33ಆಗ ಯೇಸು ಅವರಿಗೆ <<ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.34 ನೀವು ನನ್ನನ್ನು ಹುಡುಕುವಿರಿ, ಆದರೆ ಕಂಡುಕೊಳ್ಳದೆ ಹೋಗುವಿರಿ. ನಾನು ಇರುವಲ್ಲಿಗೆ ನೀವು ಬರಲಾರಿರಿ>> ಎಂದನು.35ಅದಕ್ಕೆ ಯೆಹೂದ್ಯರು <<ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?36<ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ ಮತ್ತು ನಾನು ಇರುವಲ್ಲಿಗೆ ನೀವು ಬರಲಾರಿರಿ> ಎಂದು ಹೇಳಿದ ಮಾತಿನ ಅರ್ಥ ಏನಾಗಿರಬಹುದು?>> ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.37ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು <<ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.38ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು>> ಎಂದು ಕೂಗಿ ಹೇಳಿದನು.39ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.40ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ <<ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ>> ಎಂದರು.41ಕೆಲವರು, <<ಈತನು ಕ್ರಿಸ್ತನು>> ಎಂದರು, ಆದರೆ ಇನ್ನೂ ಕೆಲವರು <<ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ?42 ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?>> ಅಂದರು.43ಹೀಗೆ ಆತನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.44ಅವರಲ್ಲಿ ಕೆಲವರು ಆತನನ್ನು ಬಂಧಿಸಬೇಕೆಂದಿದ್ದರೂ ಆದರೆ ಯಾರು ಆತನ ಮೇಲೆ ಕೈ ಹಾಕಲಿಲ್ಲ.45ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, <<ನೀವು ಏಕೆ ಆತನನ್ನು ಕರೆತರಲಿಲ್ಲ?>> ಎಂದು ಅವರನ್ನು ಕೇಳಿದ್ದಕ್ಕೆ,46ಕಾವಲುಗಾರರು <<ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ>> ಎಂದು ಉತ್ತರ ಕೊಟ್ಟರು.47ಆಗ ಫರಿಸಾಯರು ಅವರಿಗೆ <<ನೀವೂ ಸಹ ಆತನ ಮಾತಿಗೆ ಮರುಳಾದೀರಾ?48ಹಿರೀಸಭೆಯವರಲ್ಲಾಗಲಿ ಫರಿಸಾಯರಲ್ಲಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ?49ಧರ್ಮಶಾಸ್ತ್ರವನ್ನು ಅರಿಯದ ಈ ಹಿಂಡು ಶಾಪಗ್ರಸ್ತರೇ>> ಎಂದು ಹೇಳಿದರು.50ಮೊದಲು ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು,51ಅವನು ಅವರಿಗೆ <<ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?>> ಎಂದು ಹೇಳಿದ್ದಕ್ಕೆ,52ಅವರು ಅವನಿಗೆ <<ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,>> ಎಂದರು.53 ಬಳಿಕ ಎಲ್ಲರೂ ತಮ್ಮ ತಮ್ಮ ಮನೆಗೆ ಹೋದರು.
8ವ್ಯಭಿಚಾರಿಣಿಗೂ ಕ್ಷಮಾಪಣೆ
1ಯೇಸು ಎಣ್ಣೆಮರಗಳ ಗುಡ್ಡಕ್ಕೆ ಹೋದನು.2ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು.3ಶಾಸ್ತ್ರಿಗಳೂ ಮತ್ತು ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿಬಿದ್ದ ಒಬ್ಬ ಹೆಂಗಸನ್ನು ಹಿಡಿದು ಆತನ ಬಳಿಗೆ ತಂದು ಆಕೆಯನ್ನು ಅವರ ಗುಂಪಿನ ಮಧ್ಯದಲ್ಲಿ ನಿಲ್ಲಿಸಿ;4ಯೇಸುವಿಗೆ, <<ಬೋಧಕನೇ, ಈ ಸ್ತ್ರೀ ವ್ಯಭಿಚಾರ ಮಾಡುತ್ತಿರುವಾಗಲೇ ಸಿಕ್ಕಿಬಿದ್ದಳು.5 ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ಧರ್ಮಶಾಸ್ತ್ರದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಈಕೆಯ ವಿಷಯದಲ್ಲಿ ನೀನು ಏನು ಹೇಳುತ್ತೀ?>> ಎಂದು ಆತನನ್ನು ಕೇಳಿದರು.6ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.7ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, <<ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ>> ಎಂದು ಹೇಳಿದನು8ತಿರುಗಿ ಆತನು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.9ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.10ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, <<ಸ್ತ್ರೀಯೇ, ಅವರು ಎಲ್ಲಿಗೆ ಹೋದರು? ನಿನನ್ನು ಖಂಡಿಸುವುದಕ್ಕೆ ಯಾರೂ ಉಳಿಯಲಿಲ್ಲವೋ?>> ಎಂದನು.11ಅದಕ್ಕೆ ಆಕೆಯು <<ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ>> ಎಂದಳು. ಯೇಸು ಆಕೆಗೆ <<ನಾನೂ ಸಹ ನಿನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ>> ಎಂದು ಹೇಳಿದನು.ಯೇಸು ಲೋಕದ ಬೆಳಕಾಗಿದ್ದಾನೆ
12ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, <<ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು>> ಎಂದು ಹೇಳಿದನು.13ಫರಿಸಾಯರು ಆತನಿಗೆ <<ನಿನ್ನ ವಿಷಯವಾಗಿ ನೀನೇ ಸಾಕ್ಷಿ ಹೇಳುತ್ತಿರುವೆ, ನಿನ್ನ ಸಾಕ್ಷಿಯು ನಿಜವಲ್ಲ>> ಎಂದು ಹೇಳಲು14ಯೇಸು ಅವರಿಗೆ <<ನನ್ನ ವಿಷಯವಾಗಿ ನಾನು ಸಾಕ್ಷಿನೀಡಿದರೂ, ನನ್ನ ಸಾಕ್ಷಿ ಸತ್ಯವಾದದ್ದು. ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆ ಎಂದು ನನಗೆ ತಿಳಿದಿದೆ, ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ಎಂಬುದು ನಿಮಗೆ ತಿಳಿಯದು.15ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ, ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.16ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಬ್ಬಂಟಿಗನಲ್ಲ, ನನ್ನನ್ನು ಕಳುಹಿಸಿಕೊಟ್ಟ ನನ್ನ ತಂದೆಯೂ ನನ್ನ ಜೊತೆಯಲ್ಲಿ ಇದ್ದಾನೆ.17 ಇಬ್ಬರ ಸಾಕ್ಷಿಯು ಸತ್ಯವಾದದ್ದು ಎಂದು ನಿಮ್ಮ ಧರ್ಮಶಾಸ್ತ್ರದಲ್ಲಿಯೇ ಬರೆದಿದೆ.18ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾನೆ>> ಎಂದನು.19ಅವರು, <<ನಿನ್ನ ತಂದೆ ಎಲ್ಲಿದ್ದಾನೆ?>> ಎಂದರು. ಅದಕ್ಕೆ ಯೇಸು, <<ನೀವು ನನ್ನನ್ನೂ ತಿಳಿದಿಲ್ಲ ಹಾಗೂ ನನ್ನ ತಂದೆಯನ್ನೂ ತಿಳಿದಿಲ್ಲ. ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿದಿರುವಿರಿ>> ಎಂದು ಉತ್ತರ ಕೊಟ್ಟನು.20ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.21ಯೇಸು ತಿರುಗಿ ಅವರಿಗೆ, <<ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ>> ಎಂದನು.22ಅದಕ್ಕೆ ಯೆಹೂದ್ಯರು, <<ನಾವು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?>> ಎಂದು ಮಾತನಾಡಿಕೊಂಡರು.23ಆತನು ಅವರಿಗೆ, <<ನೀವು ಕೆಳಗಿನವರು; ನಾನು ಮೇಲಿನಿಂದ ಬಂದವನು. ನೀವು ಈ ಲೋಕದವರು; ನಾನು ಈ ಲೋಕದವನಲ್ಲ.24ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ>> ಎಂದು ಹೇಳಿದನು.25ಆಗ ಅವರು ಆತನಿಗೆ, <<ನೀನು ಯಾರು?>> ಎನ್ನಲೂ, ಯೇಸು ಅವರಿಗೆ, <<ಮೊದಲಿನಿಂದಲೇ ನಾನು ನಿಮಗೆ ಹೇಳಿದಂಥದ್ದೇ.26ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ>> ಎಂದನು.27ಆತನು ತಂದೆಯ ಕುರಿತಾಗಿ ಅವರೊಂದಿಗೆ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.28ಹೀಗಿರಲಾಗಿ ಯೇಸು ಅವರಿಗೆ, <<ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ.29ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ>> ಎಂದನು.30ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.31ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, <<ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.32ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು>> ಎಂದು ಹೇಳಿದನು.33ಅದಕ್ಕವರು ಆತನಿಗೆ, <<ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?>> ಎಂದು ಪ್ರಶ್ನಿಸಿದರು.34ಅದಕ್ಕೆ ಯೇಸು, <<ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.35ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ, ಆದರೆ ಮಗನು ಶಾಶ್ವತವಾಗಿ ಇರುತ್ತಾನೆ.36ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು.37ನೀವು ಅಬ್ರಹಾಮನ ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ.38ನಾನು ತಂದೆಯ ಬಳಿಯಲ್ಲಿ ನೋಡಿದ್ದನ್ನೇ ಮಾತನಾಡುತ್ತೇನೆ, ನೀವು ತಂದೆಯಿಂದ ಕೇಳಿದ್ದನ್ನೇ ಮಾಡಿರಿ>> ಎಂದನು.39ಅದಕ್ಕೆ ಅವರು, <<ನಮ್ಮ ತಂದೆಯು ಅಬ್ರಹಾಮನೇ>> ಎಂದರು. ಅದಕ್ಕೆ ಯೇಸು ಅವರಿಗೆ, <<ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ.40ಆದರೂ, ನೀವು ಹಾಗೆ ಮಾಡದೇ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದೀರಿ. ಅಬ್ರಹಾಮನು ಹೀಗೆ ಮಾಡಲಿಲ್ಲ.41ನೀವು ನಿಮ್ಮ ತಂದೆಯ ಕಾರ್ಯಗಳನ್ನು ಮಾಡುತ್ತಿದ್ದೀರಿ>> ಎಂದನು. ಅದಕ್ಕವರು, <<ನಾವು ವ್ಯಭಿಚಾರದಿಂದ ಹುಟ್ಟಿದವರಲ್ಲ. ನಮಗೆ ಒಬ್ಬನೇ ತಂದೆ, ಆತನು ದೇವರೇ>> ಎಂದರು.42ಯೇಸು ಅವರಿಗೆ, <<ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ.43ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ.44 ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.45ಆದರೂ, ನಾನು ಸತ್ಯವನ್ನು ಹೇಳುವವನಾಗಿದ್ದರೂ ನೀವು ನನ್ನನ್ನು ನಂಬುವುದಿಲ್ಲ.46ನನ್ನಲ್ಲಿ ಪಾಪವಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ, ನೀವು ನನ್ನನ್ನು ಯಾಕೆ ನಂಬುವುದಿಲ್ಲ?47ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ>> ಎಂದು ಹೇಳಿದನು.48ಅದಕ್ಕೆ ಯೆಹೂದ್ಯರು, <<ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?>> ಎಂದು ಕೇಳಿದರು.49ಅದಕ್ಕೆ ಯೇಸು; <<ನನಗೆ ದೆವ್ವ ಹಿಡಿದಿಲ್ಲ. ನಾನು ನನ್ನ ತಂದೆಯನ್ನು ಗೌರವಿಸುತ್ತೇನೆ, ಆದರೆ ನೀವು ನನಗೆ ಅವಮಾನಪಡಿಸುತ್ತೀದ್ದಿರಿ.50ನಾನು ನನ್ನ ಮಹಿಮೆಯನ್ನು ಹುಡುಕುವುದಿಲ್ಲ, ಮಹಿಮೆಯನ್ನು ಹುಡುಕುವಾತನು ಒಬ್ಬನಿದ್ದಾನೆ, ಆತನೇ ನ್ಯಾಯಧಿಪತಿ.51ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ>> ಅಂದನು.52ಅದಕ್ಕೆ ಯೆಹೂದ್ಯರು <<ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು <ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ> ಎಂದು ಹೇಳುತ್ತೀಯಲ್ಲಾ?53ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?>> ಎಂದು ಕೇಳಿದರು.54ಯೇಸು <<ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ,55ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ನಾನಂತೂ ಆತನನ್ನು ಬಲ್ಲೆನು, ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು. ಆದರೆ ನಾನು ಆತನನ್ನು ತಿಳಿದಿದ್ದೇನೆ. ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.56ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡುತ್ತೇನೆಂದು ಉಲ್ಲಾಸಪಟ್ಟನು ಮತ್ತು ಅದನ್ನು ನೋಡಿ ಸಂತೋಷಪಟ್ಟನು>> ಎಂದು ಹೇಳಿದನು.57ಅದಕ್ಕೆ ಯೆಹೂದ್ಯರು, <<ನಿನಗೆ ಇನ್ನೂ ಐವತ್ತು ವರ್ಷವಾಗಿಲ್ಲ, ನೀನು ಅಬ್ರಹಾಮನನ್ನು ನೋಡಿದ್ದೀಯಾ?>> ಅಂದರು.58ಯೇಸು, <<ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ; ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ>> ಎಂದನು.59ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.
9ಯೇಸು ಸಬ್ಬತ್ ದಿನದಲ್ಲಿ ಹುಟ್ಟುಕುರುಡನಿಗೆ ಕಣ್ಣುಕೊಟ್ಟಿದ್ದು
1ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.2ಆತನ ಶಿಷ್ಯರು, <<ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವ ಇವನ ತಂದೆತಾಯಿಗಳೋ?>> ಎಂದು ಆತನನ್ನು ಕೇಳಿದರು.3ಯೇಸು, <<ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು.4 ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.5ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ>> ಎಂದನು.6ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು.7ಆತನು ಅವನಿಗೆ, <<ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ>> ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.8ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, <<ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?>> ಎಂದು ವಿಚಾರಿಸಿದರು.9ಕೆಲವರು, <<ಹೌದು ಇವನೇ>> ಎಂದರು. ಇನ್ನೂ ಕೆಲವರು, <<ಅವನಲ್ಲ ಆದರೆ ಅವನ ಹಾಗೆ ಇದ್ದಾನೆ>> ಎಂದರು. ಆದರೆ ಅವನಾದರೋ, <<ನಾನೇ ಅವನು>> ಎಂದು ಹೇಳಿದನು.10ಆಗ ಅವರು <<ಹಾಗಾದರೆ ನಿನ್ನ ಕಣ್ಣು ಹೇಗೆ ತೆರೆದವು?>> ಎಂದು ಅವನನ್ನು ಕೇಳಿದ್ದಕ್ಕೆ,11ಅವನು, <<ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, <ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ> ಎಂದು ಹೇಳಿದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು>> ಎಂದನು.12ಅವರು, <<ಆತನು ಎಲ್ಲಿದ್ದಾನೆ?>> ಎಂದು ಅವನನ್ನು ಕೇಳಿದ್ದಕ್ಕೆ, ಅವನು <<ನನಗೆ ಗೊತ್ತಿಲ್ಲ>> ಎಂದನು.ಫರಿಸಾಯರು ಆ ಕುರುಡನನ್ನು ಬಹಿಷ್ಕರಿಸಿದ್ದು
13ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.14ಯೇಸು ಕೆಸರು ಮಾಡಿ ಅವನಿಗೆ ದೃಷ್ಟಿ ಕೊಟ್ಟ ದಿನವು ಸಬ್ಬತ್ ದಿನವಾಗಿತ್ತು.15ಆದಕಾರಣ ಆ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, <<ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು>> ಎಂದು ಉತ್ತರಕೊಟ್ಟನು.16ಫರಿಸಾಯರಲ್ಲಿ ಕೆಲವರು, <<ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ>> ಎಂದರು. ಇನ್ನು ಕೆಲವರು, <<ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?>> ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.17ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, <<ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?>> ಎಂದು ಕೇಳಿದಾಗ, ಅವನು <<ಆತನು ಒಬ್ಬ ಪ್ರವಾದಿ>> ಎಂದು ಉತ್ತರಕೊಟ್ಟನು.18ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.19ಅವರು <<ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಹೇಗೆ ದೃಷ್ಟಿ ಬಂದಿತು?>> ಎಂದು ಅವರನ್ನು ಕೇಳಿದರು.20ಅವನ ತಂದೆ ತಾಯಿಗಳು, <<ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು.21ಈಗ ಇವನು ನೋಡುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೋ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲಾ, ಇವನೇ ತನ್ನ ವಿಷಯವಾಗಿ ಹೇಳುವನು>> ಎಂದು ಉತ್ತರಕೊಟ್ಟರು.22ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.23<<ಇವನು ಪ್ರಾಯದವನು ಇವನನ್ನೇ ಕೇಳಿರಿ>> ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ.24ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, <<ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು>> ಎಂದರು.25ಅದಕ್ಕೆ ಅವನು, <<ಆತನು ಪಾಪಿಷ್ಠನೋ ಏನೋ ನನಗೆ ಗೊತ್ತಿಲ್ಲ, ಒಂದು ಮಾತ್ರ ಬಲ್ಲೆನು ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತಿದ್ದೇನೆ>> ಎಂದನು.26ಅವರು ಅವನನ್ನು, <<ಆತನು ನಿನಗೆ ಏನು ಮಾಡಿದನು? ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?>> ಎಂದು ಕೇಳಿದ್ದಕ್ಕೆ,27ಅವನು, <<ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ! ನೀವು ಯಾಕೆ ಪುನಃ ಪುನಃ ಕೇಳುತ್ತಿದ್ದೀರಿ? ನೀವು ಸಹ ಆತನ ಶಿಷ್ಯರಾಗುವುದಕ್ಕೆ ಬಯಸುತ್ತಿದ್ದೀರೋ?>> ಎಂದನು.28ಅದಕ್ಕೆ ಅವರು ಅವನನ್ನು ನಿಂದಿಸಿ, <<ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.29ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು>> ಎಂದರು.30ಅದಕ್ಕೆ ಆ ಮನುಷ್ಯನು, <<ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!31ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.32ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ.33ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು>> ಎಂದನು.34ಈ ಮಾತಿಗೆ ಅವರು, <<ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?>> ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.ಆತ್ಮಿಕ ಕುರುಡುತನ
35ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, <<ನೀನು ಮನುಷ್ಯಕುಮಾರನನ್ನು ನಂಬುತ್ತೀಯೋ?>> ಎಂದು ಕೇಳಿದನು.36ಅದಕ್ಕೆ ಅವನು, <<ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ>> ಎಂದಾಗ,37ಯೇಸು, <<ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು>> ಎಂದು ಹೇಳಿದಾಗ,38ಅವನು, <<ಕರ್ತನೇ, ನಾನು ನಂಬುತ್ತೇನೆ>> ಎಂದು ಹೇಳಿ ಆತನಿಗೆ ಅಡ್ಡಬಿದ್ದನು.39ಆಗ ಯೇಸುವು, <<ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು>> ಎಂದನು.40ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, <<ನಾವು ಸಹ ಕುರುಡರೇನು?>> ಎಂದು ಕೇಳಿದಾಗ,41ಯೇಸು ಅವರಿಗೆ, <<ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ <ನಿಮಗೆ ಕಣ್ಣುಕಾಣುತ್ತವೆ> ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ>> ಎಂದನು.
10ಒಳ್ಳೆಯ ಕುರುಬನು
1<<ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ.2ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು.3ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.4ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.5ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವುದಿಲ್ಲ. ಏಕೆಂದರೆ ಅವು ಅಪರಿಚಿತರ ಸ್ವರವನ್ನು ಗುರುತಿಸುವುದಿಲ್ಲ>> ಎಂದು ನಿಮಗೆ ಹೇಳುತ್ತೇನೆ.6ಈ ಸಾಮ್ಯವನ್ನು ಯೇಸು ಅವರಿಗೆ ಹೇಳಿದನು. ಆದರೂ ಆತನು ಹೇಳಿದ ವಿಷಯಗಳ ಅರ್ಥ ಏನೆಂಬುದು ಅವರು ಗ್ರಹಿಸಲಿಲ್ಲ.7ಆಗ ಯೇಸು ಪುನಃ ಅವರಿಗೆ, <<ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ,8ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ, ದರೋಡೆಕೋರರೂ ಆಗಿದ್ದರು. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.9ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.10ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.11 <<ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.12ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ.13ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ.14ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.15ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.16ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.17 ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ, ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ.18ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ>> ಎಂದನು.19ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಪುನಃ ಬೇಧ ಉಂಟಾಯಿತು.20ಅವರಲ್ಲಿ ಅನೇಕರು ಆತನಿಗೆ, <<ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?>> ಎಂದರು.21ಇನ್ನು ಕೆಲವರು, <<ಇವು ದೆವ್ವಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?>> ಎಂದರು.ಯೇಸು ತಿರಸ್ಕರಿಸಲ್ಪಟ್ಟಿದ್ದು
22ಆನಂತರ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವು ನಡೆಯಿತು. ಅದು ಚಳಿಗಾಲವಾಗಿತ್ತು.23ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಾ ಇರುವಾಗ,24ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, <<ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು>> ಎಂದರು.25ಅದಕ್ಕೆ ಯೇಸು, <<ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬುವುದಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಯಾಗಿವೆ.26ಆದರೂ, ನೀವು ನಂಬದೆ ಇದ್ದೀರಿ, ಏಕೆಂದರೆ ನೀವು ನನ್ನ ಕುರಿಗಳಲ್ಲ.27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.28 ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.29ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು.30ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ>> ಎಂದನು.31ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು,32ಯೇಸು ಅವರಿಗೆ, <<ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?>> ಎಂದು ಕೇಳಿದ್ದಕ್ಕೆ,33ಯೆಹೂದ್ಯರು, <<ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ>> ಎಂದು ಉತ್ತರ ಕೊಟ್ಟರು.34ಅದಕ್ಕೆ ಯೇಸು, << < ನೀವು ದೇವರುಗಳೇ ಆಗಿದ್ದೀರಿ ಎಂದು ನಾನು ಹೇಳಿದೆನು> ಎಂಬುದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿಲ್ಲವೋ?35ಧರ್ಮಶಾಸ್ತ್ರವು ನಿರಾರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ <ದೇವರುಗಳೆಂದೂ,> ಆತನು ಕರೆದಿರುವುದಾದರೆ36ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ <ನಾನು ದೇವರ ಮಗನಾಗಿದ್ದೇನೆಂದು> ಹೇಳಿದ್ದಕ್ಕೆ <ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?>37ನಾನು ನನ್ನ ತಂದೆಯ ಕ್ರಿಯೆಗಳನ್ನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ38ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು>> ಎಂದನು.39 ಅವರು ಪುನಃ ಆತನನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು, ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಹೋದನು.40ಆ ಮೇಲೆ ಆತನು ಯೊರ್ದನ್ ಹೊಳೆಯನ್ನು ದಾಟಿ, ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಹೋಗಿ ಅಲ್ಲಿ ಉಳಿದು ಕೊಂಡನು.41ಆಗ ಅನೇಕರು ಆತನ ಬಳಿಗೆ ಬಂದು, <<ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ, ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ಸತ್ಯವಾಗಿದೆ>> ಎಂದು ಮಾತನಾಡುತ್ತಿದ್ದರು.42ಅಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.
11ಲಾಜರನ ಮರಣ
1ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.2 ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.3ಹೀಗಿರಲಾಗಿ ಅವನ ಸಹೋದರಿಯರು, <<ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ>> ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.4ಯೇಸು ಇದನ್ನು ಕೇಳಿ, <<ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು>> ಎಂದು ಹೇಳಿದನು.5ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು.6ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆಯೂ ಎರಡು ದಿನ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡನು.7ಬಳಿಕ ಆತನು ತನ್ನ ಶಿಷ್ಯರಿಗೆ, <<ನಾವು ಪುನಃ ಯೂದಾಯಕ್ಕೆ ಹೋಗೋಣ>> ಎಂದು ಹೇಳಿದನು.8ಆತನ ಶಿಷ್ಯರು ಆತನಿಗೆ, <<ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?>> ಎಂದರು.9ಯೇಸು, <<ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ.10ರಾತ್ರಿಯಲ್ಲಿ ನಡೆದರೆ ತನ್ನಲ್ಲಿ ಬೆಳಕಿಲ್ಲದ್ದರಿಂದ ಅವನು ಎಡವುತ್ತಾನೆ>> ಎಂದು ಉತ್ತರಕೊಟ್ಟನು.11ಇದನ್ನು ಹೇಳಿದ ಮೇಲೆ ಆತನು ಅವರಿಗೆ, <<ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ>> ಎಂದು ಹೇಳಿದನು.12ಅದಕ್ಕೆ ಶಿಷ್ಯರು, <<ಅವನು ನಿದ್ರೆ ಮಾಡುತ್ತಿದ್ದರೆ ಸ್ವಸ್ಥನಾಗುವನು>> ಎಂದರು.13ಯೇಸು ಅವನ ಮರಣವನ್ನು ಕುರಿತು ಅದನ್ನು ಹೇಳಿದ್ದನು, ಆದರೆ ಅವರು ವಿಶ್ರಾಂತಿಗಾಗಿ ಮಲಗಿದ್ದಾನೆಂಬುದಾಗಿ ಹೇಳಿದನೆಂದು ಯೋಚಿಸಿದರು.14ಆಗ ಯೇಸು ಸ್ಪಷ್ಟವಾಗಿ ಅವರಿಗೆ, <<ಲಾಜರನು ಸತ್ತು ಹೋಗಿದ್ದಾನೆ.15ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ>>ಎಂದು ಹೇಳಿದನು16ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, <<ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ>> ಎಂದು ಹೇಳಿದನು.ಮಾರ್ಥ ಮತ್ತು ಮರಿಯಳನ್ನು ಯೇಸು ಸಂತೈಸಿದ್ದು
17ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಯಿತೆಂದು ಆತನಿಗೆ ತಿಳಿದು ಬಂದಿತು.18ಬೇಥಾನ್ಯವು ಯೆರೂಸಲೇಮಿಗೆ ಸಮೀಪವಾಗಿತ್ತು. ಯೆರುಸಲೇಮಿನಿಂದ ಸುಮಾರು ಒಂದು ಹರಿದಾರಿಯಷ್ಟು ಅಂತರವಿತ್ತು.19ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.20ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವುದಕ್ಕೆ ಎದ್ದು ಹೋದಳು. ಆದರೆ ಮರಿಯಳು ಮನೆಯಲ್ಲೇ ಉಳಿದುಕೊಂಡಿದ್ದಳು.21ಆಗ ಮಾರ್ಥಳು ಯೇಸುವಿಗೆ, <<ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ.22ಈಗಲಾದರೂ ನೀನು ದೇವರನ್ನು ಏನು ಕೇಳಿಕೊಂಡರೂ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ನಾನು ಬಲ್ಲೆನು>> ಎಂದು ಹೇಳಿದಳು.23ಯೇಸು ಆಕೆಗೆ, <<ನಿನ್ನ ತಮ್ಮನು ಪುನಃ ಎದ್ದು ಬರುವನು>> ಎಂದು ಹೇಳಿದನು.24ಮಾರ್ಥಳು ಆತನಿಗೆ, <<ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು>> ಅಂದಳು.25ಯೇಸು ಆಕೆಗೆ, <<ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,26ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?>> ಎಂದು ಕೇಳಿದಕ್ಕೆ,27ಆಕೆಯು ಆತನಿಗೆ, <<ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ>> ಅಂದಳು.28ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, <<ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ>> ಎಂದಳು.29ಮರಿಯಳು ಇದನ್ನು ಕೇಳಿದಾಗ ತಟ್ಟನೆ ಎದ್ದು ಆತನ ಬಳಿಗೆ ಹೋದಳು.30ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.31ಮರಿಯಳೊಂದಿಗೆ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯ ಹಿಂದೆ ಹೋದರು.32ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, <<ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ>> ಎಂದಳು.33ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು,34<<ಅವನನ್ನು ಎಲ್ಲಿ ಇಟ್ಟಿದ್ದೀರಿ?>> ಎಂದನು. ಅವರು ಆತನಿಗೆ, <<ಕರ್ತನೇ, ಬಂದು ನೋಡು>> ಎಂದರು.35ಯೇಸು ಕಣ್ಣೀರಿಟ್ಟನು.36ಅದಕ್ಕೆ ಯೆಹೂದ್ಯರು, <<ಆಹಾ! ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದಾನೆ>> ಎಂದರು.37ಅವರಲ್ಲಿ ಕೆಲವರು, <<ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?>> ಎಂದರು.ಯೇಸು ಲಾಜರನನ್ನು ಮರಣದಿಂದ ಎಬ್ಬಿಸಿದ್ದು
38ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.39ಯೇಸು, <<ಆ ಕಲ್ಲನ್ನು ತೆಗೆದು ಹಾಕಿರಿ>> ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, <<ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು>> ಎಂದಳು.40ಯೇಸು ಆಕೆಗೆ, <<ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?>> ಎಂದು ಉತ್ತರ ಕೊಟ್ಟನು41ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, <<ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.42ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ>> ಎಂದು ಹೇಳಿದನು.43ಆತನು ಹೀಗೆ ಹೇಳಿದ ಮೇಲೆ, <<ಲಾಜರನೇ, ಹೊರಗೆ ಬಾ!>> ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.44ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, <<ಅವನನ್ನು ಬಿಡಿಸಿರಿ, ಅವನು ಹೋಗಲಿ>> ಎಂದು ಹೇಳಿದನು.ಯೆಹೂದ್ಯರ ಹಿರೀಸಭೆಯವರು ಯೇಸುವನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡಿದ್ದು;
45ಆದುದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯವನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.46ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕಾರ್ಯಗಳನ್ನು ಅವರಿಗೆ ಹೇಳಿದರು.47ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, <<ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.48ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶಮಾಡಿ ಕೊಂಡಾರು>> ಎಂದರು.49ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ ಕಾಯಫನೆಂಬುವನು ಅವರಿಗೆ, <<ನಿಮಗೇನೂ ತಿಳಿಯುತ್ತಿಲ್ಲ.50ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ>> ಎಂಬುದಾಗಿ ಹೇಳಿದನು.51ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ52ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುವುದಾಗಿ ಪ್ರವಾದಿಸಿದನು53ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು.54ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯಿಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು.55ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.56ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, <<ಅವನು ಹಬ್ಬಕ್ಕೆ ಬಾರದೇ ಇದ್ದಾನೋ? ನಿಮಗೆ ಹೇಗೆ ತೋರುತ್ತದೆ?>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಾ ಇದ್ದರು.57ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.
12ಮರಿಯಳು ಸುಗಂಧ ತೈಲವನ್ನು ಯೇಸುವಿನ ಪಾದಕ್ಕೆ ಹಚ್ಚಿದ್ದು
1 ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.2ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು.3ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಚ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.4ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ, ಆತನನ್ನು ಹಿಡಿದುಕೊಡುವುದಕ್ಕಿದ್ದ ಇಸ್ಕರಿಯೋತ ಯೂದನೆಂಬುವನು,5<<ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?>> ಎಂದನು.6ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.7ಆಗ ಯೇಸುವು, <<ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ.8ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ>> ಎಂದನು.9ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು.10ಆದರೆ ಮುಖ್ಯಯಾಜಕರು ಲಾಜರನನ್ನೂ ಸಹ ಕೊಲ್ಲಬೇಕೆಂದು ಆಲೋಚಿಸಿದರು.11ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು.ಯೇಸು ಯೆರೂಸಲೇಮಿನಲ್ಲಿ ಅರಸನಂತೆ ಪ್ರವೇಶಿಸಿದ್ದು
(ಮತ್ತಾ. 21:4-9; ಮಾರ್ಕ 11:7-10; ಲೂಕ 19:35-38)
12ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ13ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, <<ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ>> ಎಂದು ಆರ್ಭಟಿಸಿದರು.14ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು.15ಹೀಗೆ, <<ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ>> ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು.16ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.17ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು.18ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು.19ಹೀಗಿರಲಾಗಿ ಫರಿಸಾಯರು, <<ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ>> ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.ಗ್ರೀಕರಿಗೂ ಯೇಸುವನ್ನು ಕಾಣುವ ಬಯಕೆ
20ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.21ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, <<ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು>> ಅವನನ್ನು ಬೇಡಿಕೊಂಡರು.22ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು.23ಆಗ ಯೇಸು ಅವರಿಗೆ, <<ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು25 ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.26ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.27ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? <ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.> ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?28ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ>> ಎಂದನು. ಅದಕ್ಕೆ, <<ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು>> ಎಂಬ ಸ್ವರವು ಪರಲೋಕದಿಂದ ಬಂದಿತು.29ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, <<ಗುಡುಗಿತು>> ಎಂದರು. ಇನ್ನು ಕೆಲವರು <<ದೇವದೂತನು ಈತನ ಸಂಗಡ ಮಾತನಾಡಿದನು>> ಎಂದರು.30ಯೇಸು ಅವರಿಗೆ, <<ಈ ಸ್ವರವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು.31 ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು32ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು>> ಎಂದು ಹೇಳಿದನು.33ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು.34ಅದಕ್ಕೆ ಆ ಜನರು, <<ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?>> ಎಂದರು.35ಆಗ ಯೇಸು ಅವರಿಗೆ, <<ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.36ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ>> ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.ಯೆಹೂದ್ಯರ ಅಪನಂಬಿಕೆ
37ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.38ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನಂದರೆ, <<ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?>> ಎಂಬುದೇ.39ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನಂದರೆ,40 <<ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು>> ಎಂಬುದೇ.41 ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.42ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.43ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.44ಯೇಸು ಕೂಗಿ ಹೇಳಿದ ಮಾತೇನಂದರೆ, <<ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ.45ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ.46ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.47ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.48ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವವನು ಒಬ್ಬನಿದ್ದಾನೆ. ಅದು ನಾನು ಆಡುವ ಮಾತುಗಳೇ ಕಡೆಯ ದಿನದಲ್ಲಿ ಅವನಿಗೆ ತೀರ್ಪಾಗಿರುವುದು.49ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು,ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ.50ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ>> ಎಂದನು.
13ಯೇಸು ತನ್ನ ಶಿಷ್ಯರ ಕಾಲುಗಳನ್ನು ತೊಳೆದದ್ದು
1ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.2ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.3ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.4ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು.5ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು.6ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, <<ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?>> ಎಂದು ಹೇಳಿದನು.7ಅದಕ್ಕೆ ಯೇಸು <<ನಾನು ಮಾಡುವುದು ಏನೆಂದು ಈಗ ನಿನಗೆ ತಿಳಿಯುವುದಿಲ್ಲ. ಆನಂತರ ನಿನಗೆ ತಿಳಿಯುವುದು>> ಎಂದನು.8ಪೇತ್ರನು ಆತನಿಗೆ, <<ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು>> ಎಂದು ಹೇಳಿದ್ದಕ್ಕೆ, ಯೇಸು, <<ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ>> ಎಂದನು.9ಸೀಮೋನ ಪೇತ್ರನು, <<ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ, ಕೈಗಳನ್ನೂ, ತಲೆಯನ್ನೂ ಸಹ ತೊಳೆ>> ಎಂದನು.10ಯೇಸು ಅವನಿಗೆ, <<ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ>> ಎಂದು ಹೇಳಿದನು.11ಯೇಸು ತನ್ನನ್ನು ಹಿಡಿದು ಕೊಡುವವನು ಯಾರೆಂದು ತಿಳಿದಿದ್ದರಿಂದ, <<ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ>> ಎಂದು ಹೇಳಿದ್ದನು.12ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, <<ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?13ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.14ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.15ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.16ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ತನ್ನ ದಣಿಗಿಂತ ಆಳು ದೊಡ್ಡವನಲ್ಲ. ಹಾಗೆಯೇ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.17ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.18ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.19ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ.20ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.>>ಯೇಸು ತನ್ನನ್ನು ಹಿಡಿದುಕೊಡುವವನನ್ನು ಸೂಚಿಸಿದ್ದು
21ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, <<ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ>> ಎಂದು ಸಾಕ್ಷಿ ಹೇಳಿದನು.22ಆಗ ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಗಲಿಬಿಲಿಗೊಂಡು ಒಬ್ಬರನೊಬ್ಬರು ನೋಡಿಕೊಂಡರು.23ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.24ಅವನಿಗೆ ಸೀಮೋನ ಪೇತ್ರನು ಸನ್ನೆಮಾಡಿ, <<ಆತನು ಯಾರ ವಿಷಯವಾಗಿ ಮಾತನಾಡಿದನು ಎಂದು ಕೇಳು>> ಅಂದನು.25ಆ ಶಿಷ್ಯನು ಹಾಗೆಯೇ ಯೇಸುವಿನ ಎದೆಗೆ ಒರಗಿಕೊಂಡವನಾಗಿ, <<ಕರ್ತನೇ, ಅವನು ಯಾರು?>> ಎಂದು ಆತನನ್ನು ಕೇಳಿದನು.26ಅದಕ್ಕೆ ಯೇಸು, <<ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!>> ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು.27ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, <<ನೀನು ಮಾಡುವುದನ್ನು ಬೇಗನೇ ಮಾಡು>> ಎಂದು ಹೇಳಿದನು.28ಆದರೆ ಆತನು ಅವನಿಗೆ ಇದನ್ನು ಏಕೆ ಹೇಳಿದನೆಂದು ಊಟದ ಮೇಜಿನಲ್ಲಿ ಕುಳಿತವರಲ್ಲಿ ಯಾರಿಗೂ ತಿಳಿಯಲಿಲ್ಲ.29ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ <<ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ>> ಎಂದು ಅಂದುಕೊಂಡರು.30ಇಸ್ಕರಿಯೋತ ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಅಲ್ಲಿಂದ ಎದ್ದು ಹೊರಗೆ ಹೋದನು. ಆಗ ರಾತ್ರಿಯಾಗಿತ್ತು.ಹೊಸ ಆಜ್ಞೆ
31ಅವನು ಹೊರಗೆ ಹೋದ ಮೇಲೆ ಯೇಸುವು, <<ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.32ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನು ತನ್ನಲ್ಲಿ ಮಹಿಮೆ ಪಡಿಸುವನು. ತಕ್ಷಣವೇ ಮಹಿಮೆ ಪಡಿಸುವನು.33ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ <ನಾನು ಹೋಗುವಲ್ಲಿಗೆ ನೀವು ಬರಲಾರಿರಿ> ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.34 ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.35ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು>> ಎಂದನು.36ಸೀಮೋನ್ ಪೇತ್ರನು ಆತನಿಗೆ, <<ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?>> ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, <<ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ>> ಎಂದನು.37 ಪೇತ್ರನು ಆತನಿಗೆ, <<ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು>> ಎಂದು ಹೇಳಿದನು.38ಆಗ ಯೇಸು ಅವನಿಗೆ, <<ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ>> ಎಂದನು.
141<<ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.2ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!3ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.4ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ>> ಎಂದನು.5ತೋಮನು ಆತನಿಗೆ, <<ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?>> ಎಂದು ಕೇಳಲು,6ಯೇಸು ಅವನಿಗೆ, <<ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.7 ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ>> ಎಂದು ಹೇಳಿದನು.8ಫಿಲಿಪ್ಪನು, <<ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು>> ಎಂದನು.9ಯೇಸು ಅವನಿಗೆ, <<ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.11ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.12<<ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.13 ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.14ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.15<<ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.16ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.17ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.18<<ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.19ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.20ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು>> ಎಂದು ಹೇಳಿದನು.22ಯೂದನು, (ಇವನು ಇಸ್ಕರಿಯೋತನಲ್ಲ) <<ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?>> ಎಂದು ಕೇಳಿದನು.23ಯೇಸು ಅವನಿಗೆ, <<ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.24ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.25<<ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ.26ಆದರೆ ಆ ಸಹಾಯಕನು, ಎಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.27<<ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.28ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.29ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.30ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.31ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ>> ಎಂದನು.
15ಯೇಸುವೇ ನಿಜವಾದ ದ್ರಾಕ್ಷೆಬಳ್ಳಿ
1<<ನಾನೇ ನಿಜವಾದ ದ್ರಾಕ್ಷೆಬಳ್ಳಿ, ನನ್ನ ತಂದೆ ತೋಟಗಾರನು.2ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.3ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ.4ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.5ನಾನು ದ್ರಾಕ್ಷೆಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.6ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.8ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.9<<ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.11ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.12ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆಯಾಗಿದೆ.13ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.14ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.16ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.17ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ.18<<ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.19ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.20 ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.21ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.22ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.23ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ.24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ25 <ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು> ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.27ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.
161<<ನೀವು ನಂಬಿಕೆಯಿಂದ ಎಡವಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.2 ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.3ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.4ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.5<<ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. <ನೀನು ಎಲ್ಲಿಗೆ ಹೋಗುತ್ತಿ?> ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ.6ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.7ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.8ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.9ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ10ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ,11 ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.12<<ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ.13ಆದರೆ ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.14ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದ ನನ್ನನ್ನೇ ಮಹಿಮೆಪಡಿಸುವನು.15 ತಂದೆಗೆ ಇರುವುದೆಲ್ಲಾ ನನ್ನದು. ಆದುದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು.16ಇನ್ನು ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ>> ಎಂದನು.17ಇದನ್ನು ಕೇಳಿ ಆತನ ಶಿಷ್ಯರಲ್ಲಿ ಕೆಲವರು, <<ಇದೇನು ಈತನು ಹೇಳುವ ಮಾತು? <ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ ಮತ್ತು ನಾನು ತಂದೆಯ ಬಳಿಗೆ ಹೋಗುತ್ತೇನೆ> ಎನ್ನುತ್ತಾನಲ್ಲಾ>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು18<< <ಸ್ವಲ್ಪ ಕಾಲವೆಂದು> ಈತನು ಹೇಳುವ ಈ ಮಾತೇನು? ಏನು ಮಾತನಾಡುತ್ತಿದ್ದಾನೋ ನಮಗೆ ತಿಳಿಯದು>> ಎಂದು ಅಂದುಕೊಳ್ಳುತ್ತಿದ್ದರು.19ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, <<ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ?20ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವುದು.21ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.22ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.25<<ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ.26ಆ ದಿನದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ, ನಿಮ್ಮ ಪರವಾಗಿ ನಾನು ತಂದೆಯನ್ನು ಬೇಡಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ.27ನೀವು ನನ್ನನ್ನು ಪ್ರೀತಿಸಿ ನಾನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.28ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ>> ಎಂದನು.29ಅದಕ್ಕೆ ಆತನ ಶಿಷ್ಯರು, <<ಇಗೋ, ನೀನು ಹೇಳುವ ಸಂಗತಿಯನ್ನು ಈಗ ಸಾಮ್ಯರೂಪವಾಗಿ ಹೇಳದೆ ಸ್ಪಷ್ಟವಾಗಿ ಹೇಳುತ್ತಿದ್ದೀ.30ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ>> ಎಂದರು.31ಅದಕ್ಕೆ ಯೇಸು, <<ಈಗ ನೀವು ನಂಬುತ್ತೀರಿ.32ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.33 ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ>> ಎಂದು ಹೇಳಿದನು.
17ಯೇಸು ತನ್ನ ಶಿಷ್ಯರಿಗಾಗಿ ಪ್ರಾರ್ಥಿಸಿದ್ದು
1ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, <<ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.2ನೀನು ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.3ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.4ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆ ಪಡಿಸಿದ್ದೇನೆ.5ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.6<<ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೆಯರಾಗಿದ್ದಾರೆ.7ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.8ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.9ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.10ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.11ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.12ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ಆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.13<<ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.14ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.15ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.16ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.17ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.18 ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.19ಇವರು ಸತ್ಯಸನ್ನಧರಾಗಿ ಪ್ರತಿಷ್ಠಿಸಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.ಯೇಸು ಎಲ್ಲಾ ವಿಶ್ವಾಸಿಗಳಿಗಾಗಿ ಪ್ರಾರ್ಥಿಸಿದ್ದು
20<<ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ.21ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.22ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.23ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.24ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.25ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.26ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ>> ಎಂದನು.
18ಇಸ್ಕಕರಿಯೋತ ಯೂದನು ಯೇಸುವನ್ನು ಹಿಡಿದುಕೊಟ್ಟದ್ದು
(ಮತ್ತಾ. 26:47-56; ಮಾರ್ಕ 14:45-50; ಲೂಕ 22:47-58)
1ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.2ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತಿದ್ದರು.3ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.4ಆಗ ಯೇಸು ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ <<ನೀವು ಯಾರನ್ನು ಹುಡುಕುತ್ತೀರಿ?>> ಎಂದು ಕೇಳಿದನು.5ಅದಕ್ಕೆ ಅವರು, <<ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ>> ಎಂದರು. ಯೇಸು ಅವರಿಗೆ <<ನಾನೇ ಆತನು>> ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು.6ಆತನು ಅವರಿಗೆ <<ನಾನೇ ಆತನು>> ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.7ಆಗ ಆತನು ಪುನಃ ಅವರಿಗೆ <<ನೀವು ಯಾರನ್ನು ಹುಡುಕುತ್ತೀರಿ?>> ಎಂದು ಕೇಳಲು, ಅವರು, <<ನಜರೇತಿನ ಯೇಸುವನ್ನು ಹುಡುಕುತ್ತೇವೆ>> ಎಂದರು.8ಅದಕ್ಕೆ ಯೇಸು, <<ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ>> ಎಂದನು.9ಹೀಗೆ <<ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ>> ಎಂದು ತಾನೇ ಹೇಳಿದ ಮಾತು ನೆರವೇರಿತು.10ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು.11ಆಗ ಯೇಸು ಪೇತ್ರನಿಗೆ, <<ಕತ್ತಿಯನ್ನು ಒರೆಯಲ್ಲಿ ಹಾಕು. ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?>> ಎಂದು ಹೇಳಿದನು.ಮಹಾಯಾಜಕನು ಯೇಸುವನ್ನು ವಿಚಾರಿಸಿದ್ದು; ಪೇತ್ರನು ಆತನನ್ನು ನಾನರಿಯೆ ಎಂದು ಹೇಳಿದ್ದು
(ಮತ್ತಾ. 26:69-75; ಮಾರ್ಕ 14:66-72; ಲೂಕ 22:54-62)
12ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.13ಆತನನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.14 ಆ ಕಾಯಫನೇ, ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟವನು.15ಸೀಮೋನ್ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಯವಿದ್ದುದರಿಂದ ಯೇಸುವಿನ ಜೊತೆ ಮಹಾಯಾಜಕನ ಅಂಗಳದೊಳಗೆ ಹೋದನು.16ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.17ಆಗ ದ್ವಾರಪಾಲಕಿಯು, <<ನೀನು ಸಹ ಆ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?>> ಎಂದು ಪೇತ್ರನನ್ನು ಕೇಳಲು, ಅವನು, <<ನಾನಲ್ಲ>> ಎಂದನು.18ಚಳಿಯಿದ್ದುದರಿಂದ ಆಳುಗಳೂ, ಓಲೇಕಾರರೂ ಇದ್ದಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು.19ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಆತನ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.20ಅದಕ್ಕೆ ಯೇಸು, <<ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.21ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ>> ಎಂದು ಉತ್ತರಕೊಟ್ಟನು.22ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, <<ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?>> ಎಂದನು.23ಯೇಸು ಅವನಿಗೆ <<ನಾನು ಏನಾದರೂ ತಪ್ಪನ್ನು ಮಾತನಾಡಿದ್ದರೆ, ಆ ತಪ್ಪಿನ ವಿಷಯವಾಗಿ ಸಾಕ್ಷಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?>> ಎಂದು ಕೇಳಿದನು.24 ಆಗ ಅನ್ನನು ಆತನನ್ನು ಇನ್ನೂ ಕಟ್ಟಿರಲಾಗಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.25ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, <<ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?>> ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, <<ನಾನಲ್ಲ>> ಎಂದನು.26ಮಹಾಯಾಜಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು, ಪೇತ್ರನಿಗೆ, <<ನಾನು ನಿನ್ನನ್ನು ತೋಟದಲ್ಲಿ ಆತನ ಜೊತೆಯಲ್ಲಿ ನೋಡಿದೆನಲ್ಲವೇ?>> ಎಂದನು.27ಅದಕ್ಕೆ ಪೇತ್ರನು ಪುನಃ ನಿರಾಕರಿಸಿ <<ನಾನಲ್ಲ>> ಎಂದನು. ಆಗ ಕೂಡಲೇ ಕೋಳಿ ಕೂಗಿತು.ಪಿಲಾತನು ಯೇಸುವನ್ನು ವಿಚಾರಿಸಿ ಆತನಿಗೆ ಮರಣ ದಂಡನೆಯನ್ನು ವಿಧಿಸಿದ್ದು
(ಮತ್ತಾ. 27:2,11-26; ಮಾರ್ಕ 15:1-15; ಲೂಕ 23:1-25)
28ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.29ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, <<ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?>> ಎಂದು ಕೇಳಿದನು.30ಯೆಹೂದ್ಯರು ಅವನಿಗೆ, <<ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ>> ಎಂದು ಉತ್ತರಕೊಟ್ಟರು.31ಆಗ ಪಿಲಾತನು ಅವರಿಗೆ, <<ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ>> ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, <<ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ>> ಎಂದರು.32 ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.33ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, <<ನೀನು ಯೆಹೂದ್ಯರ ಅರಸನೋ?>> ಎಂದು ಕೇಳಿದನು.34ಯೇಸು, <<ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೇ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ?>> ಎಂದನು.35ಪಿಲಾತನು, <<ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?>> ಎಂದು ಕೇಳಿದ್ದಕ್ಕೆ,36ಯೇಸು, <<ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ>> ಎಂದು ಉತ್ತರಕೊಟ್ಟನು.37ಅದಕ್ಕೆ ಪಿಲಾತನು, <<ಹಾಗಾದರೆ ನೀನು ಅರಸನೋ?>> ಎಂದನು. ಯೇಸು, <<ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ>> ಎಂದು ಉತ್ತರಕೊಟ್ಟನು.38ಪಿಲಾತನು, <<ಸತ್ಯ ಎಂದರೇನು?>> ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, <<ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ.39ಆದರೆ ಪಸ್ಕ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?>> ಎಂದು ಅವರನ್ನು ಕೇಳಿದನು.40ಅದಕ್ಕೆ ಅವರೆಲ್ಲರೂ, <<ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು>> ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.
191ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು.2ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ,3ಆತನ ಬಳಿಗೆ ಬಂದು <<ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ>> ಎಂದು ಹೇಳಿ ತಮ್ಮ ಕೈಗಳಿಂದ ಆತನ ಕೆನ್ನೆಗೆ ಹೊಡೆದರು.4ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, <<ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ>> ಎಂದು ಹೇಳಿದನು.5ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, <<ಇಗೋ, ಈ ಮನುಷ್ಯನು>> ಎಂದನು.6ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, <<ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು>> ಎಂದು ಕೂಗಿದರು. ಪಿಲಾತನು ಅವರಿಗೆ, <<ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ>> ಎಂದನು.7ಯೆಹೂದ್ಯರು ಅವನಿಗೆ, <<ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ>> ಎಂದರು.8ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು,9ಪುನಃ ತನ್ನ ಅರಮನೆಯೊಳಗೆ ಹೋಗಿ, <<ನೀನು ಎಲ್ಲಿಂದ ಬಂದವನು?>> ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ.10ಪಿಲಾತನು, <<ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?>> ಎಂದು ಆತನನ್ನು ಕೇಳಿದನು.11ಅದಕ್ಕೆ ಯೇಸು, <<ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ>> ಎಂದು ಉತ್ತರ ಕೊಟ್ಟನು.12ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, <<ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ>> ಎಂದು ಕೂಗಿ ಹೇಳಿದರು.13ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, <<ಕಲ್ಲು ಹಾಸಿದ ಕಟ್ಟೆ>> ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.14ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, <<ಇಗೋ, ನಿಮ್ಮ ಅರಸನು>> ಎಂದು ಹೇಳಿದನು.15ಅದಕ್ಕೆ ಅವರು, <<ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು>> ಎಂದು ಕೂಗಿದರು. ಅದಕ್ಕೆ ಪಿಲಾತನು, <<ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?>> ಎಂದು ಹೇಳಿದಕ್ಕೆ, ಮುಖ್ಯಯಾಜಕರು, <<ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ>> ಎಂದು ಉತ್ತರ ಕೊಟ್ಟರು.16ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು.ಯೇಸುವನ್ನು ಶಿಲುಬೆಗೆ ಹಾಕಿದ್ದೂ, ಹೂಣಿಟ್ಟದ್ದೂ
(ಮತ್ತಾ. 27:32-50,57-61; ಮಾರ್ಕ 15:21-37,42-47; ಲೂಕ 23:33-46,50-56)
17ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು << ಕಪಾಲಸ್ಥಳ>> ಎಂಬ ಸ್ಥಳಕ್ಕೆ ಹೋದನು. ಇದಕ್ಕೆ ಇಬ್ರಿಯ ಮಾತಿನಲ್ಲಿ <<ಗೊಲ್ಗೊಥಾ>> ಎಂದು ಕರೆಯಲ್ಪಡುತ್ತದೆ.18ಅಲ್ಲಿ ಆತನನ್ನೂ ಆತನ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಆ ಕಡೆ ಒಬ್ಬನನ್ನು, ಈ ಕಡೆ ಒಬ್ಬನನ್ನು, ನಡುವೆ ಯೇಸುವನ್ನು ಇಟ್ಟರು.19ಇದಲ್ಲದೆ ಪಿಲಾತನು <<ನಜರೇತಿನ ಯೇಸು, ಯೆಹೂದ್ಯರ ಅರಸನು>> ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು.20ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು.21ಹೀಗಿರಲಾಗಿ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, << <ಯೆಹೂದ್ಯರ ಅರಸನು> ಎಂದು ಬರೆಯಬೇಡ, <ನಾನು ಯೆಹೂದ್ಯರ ಅರಸನೆಂದು ಹೇಳಿದವನು> ಎಂಬುದಾಗಿ ಬರೆಯಬೇಕು>> ಎಂದು ಹೇಳಿದರು.22ಅದಕ್ಕೆ ಪಿಲಾತನು, <<ನಾನು ಬರೆದದ್ದು ಬರೆದಾಯಿತು>> ಎಂದು ಉತ್ತರ ಕೊಟ್ಟನು.23ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ವಸ್ತ್ರಗಳನ್ನು ತೆಗೆದುಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಭಾಗದಂತೆ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.24ಆಮೇಲೆ ಅವರು, <<ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ>> ಎಂದು ಮಾತನಾಡಿಕೊಂಡರು. ಇದರಿಂದ <<ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು>> ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.25 ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು.26ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, <<ಸ್ತ್ರೀಯೇ, ಇಗೋ, ನಿನ್ನ ಮಗನು>> ಎಂದು ಹೇಳಿದನು.27ತರುವಾಯ ಆ ಶಿಷ್ಯನಿಗೆ, <<ಇಗೋ, ನಿನ್ನ ತಾಯಿ>> ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು.28ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, <<ನನಗೆ ನೀರಡಿಕೆಯಾಗಿದೆ>> ಎಂದನು.29ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಸ್ಪಂಜನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು.30ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, <<ತೀರಿತು>> ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು.31ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು.32ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನು ಮುರಿದರು.33ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ.34ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.35ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.36ಏಕೆಂದರೆ <<ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು>> ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.37 <<ಅವರು ತಾವು ಇರಿದವನನ್ನು ದೃಷ್ಟಿಸಿನೋಡುವರು>> ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.38ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆ ಕೊಡಲಾಗಿ, ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು.39ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.40ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು.41ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ.42ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದ್ದುದರಿಂದಲೂ ಆ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವಿನ ದೇಹವನ್ನು ಅಲ್ಲಿ ಸಮಾಧಿಯಲ್ಲಿಟ್ಟರು.
20ಯೇಸು ಜೀವಿತನಾಗಿ ಬಂದು ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು
(ಮತ್ತಾ. 28:1-10; ಮಾರ್ಕ 16:1-11; ಲೂಕ 24:1-12)
1ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು.2ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, <<ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು>> ಹೇಳಿದಳು3ಆಗ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು.4ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು.5ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ.6ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ7ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು.8ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು.9ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.10ತರುವಾಯ ಆ ಶಿಷ್ಯರು ಪುನಃ ತಮ್ಮ ಮನೆಗೆ ಹೋದರು.11ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು,12ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು.13ಅವರು ಆಕೆಗೆ, <<ಅಮ್ಮಾ, ನೀನು ಯಾಕೆ ಅಳುತ್ತಿರುವೆ?>> ಎಂದು ಕೇಳಲು, ಆಕೆಯು, <<ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ>> ಎಂದಳು.14ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು, ಆದರೆ ಆತನು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ.15ಯೇಸು ಆಕೆಗೆ, <<ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?>> ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, <<ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ>> ಎಂದು ಹೇಳಿದಳು.16ಯೇಸು ಆಕೆಗೆ, <<ಮರಿಯಳೇ,>> ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, <<ರಬ್ಬೂನಿ>> ಎಂದಳು. ಹಾಗೆಂದರೆ ಗುರುವೇ ಎಂದರ್ಥ.17ಯೇಸು ಆಕೆಗೆ, <<ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು>> ಎಂದನು.18ಮಗ್ದಲದ ಮರಿಯಳು ಹೋಗಿ <<ನಾನು ಕರ್ತನನ್ನು ನೋಡಿದ್ದೇನೆ,>> ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು.19ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, <<ನಿಮಗೆ ಸಮಾಧಾನವಾಗಲಿ>> ಎಂದನು.20ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.21ಯೇಸು ಅವರಿಗೆ, <<ನಿಮಗೆ ಸಮಾಧಾನವಾಗಲಿ>> ಎಂದು ಪುನಃ ಹೇಳಿ, <<ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ>> ಎಂದನು.22ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, <<ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ.23ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ>> ಎಂದು ಹೇಳಿದನು.24ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ.25ಉಳಿದ ಶಿಷ್ಯರು ಅವನಿಗೆ, <<ನಾವು ಕರ್ತನನ್ನು ನೋಡಿದ್ದೇವೆ>> ಎಂದು ಹೇಳಿದರು. ಅದಕ್ಕೆ ಅವನು, <<ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ>> ಎಂದನು.26ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ <<ಸಮಾಧಾನವಾಗಲಿ ಎಂದನು>>27ಆ ಮೇಲೆ ತೋಮನಿಗೆ, <<ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು>> ಎಂದು ಹೇಳಿದನು.28ತೋಮನು ಆತನಿಗೆ, <<ನನ್ನ ಕರ್ತನೇ, ನನ್ನ ದೇವರೇ>> ಎಂದು ಹೇಳಿದನು.29ಯೇಸು ಆತನಿಗೆ, <<ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು>> ಎಂದು ಹೇಳಿದನು.30ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ.31ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.
21ಯೇಸು ತನ್ನ ಶಿಷ್ಯರಿಗೆ ಪುನಃ ದರ್ಶನಕೊಟ್ಟದ್ದು
1ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:2ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.3ಆಗ ಅವರಿಗೆ ಸೀಮೋನ ಪೇತ್ರನು, <<ನಾನು ಮೀನು ಹಿಡಿಯಲು ಹೋಗುತ್ತೇನೆ>> ಎಂದು ಹೇಳಲು ಅವರು ಅವನಿಗೆ, <<ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ>> ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.4ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ.5ಆಗ ಯೇಸು ಅವರನ್ನು, <<ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?>> ಎಂದು ಕೇಳಲು, ಅವರು ಆತನಿಗೆ <<ಇಲ್ಲ>> ಎಂದು ಉತ್ತರಕೊಟ್ಟರು.6ಆತನು ಅವರಿಗೆ, <<ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ>> ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.7ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, <<ಆತನು ಕರ್ತನೇ>> ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.8ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು.9ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.10ಯೇಸು ಅವರಿಗೆ, <<ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ>> ಎಂದು ಹೇಳಲು,11ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.12ಯೇಸು ಅವರಿಗೆ, <<ಬಂದು ಊಟ ಮಾಡಿರಿ>> ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ <<ನೀನು ಯಾರು?>> ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.13ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು.14ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.15ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, <<ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?>> ಎಂದು ಕೇಳಲು ಅವನು <<ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ>> ಎಂದನು. ಆತನು ಅವನಿಗೆ, <<ನನ್ನ ಕುರಿಮರಿಗಳನ್ನು ಮೇಯಿಸು>> ಎಂದು ಹೇಳಿದನು.16ಆತನು ತಿರುಗಿ ಎರಡನೆಯ ಸಾರಿ ಅವನಿಗೆ, ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ? ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ <<ನನ್ನ ಕುರಿಗಳನ್ನು ಪಾಲಿಸು>> ಎಂದು ಹೇಳಿದನು.17ಯೇಸು ಮೂರನೆಯ ಸಾರಿ, <<ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?>> ಎಂದು ಕೇಳಿದನು, ಮೂರನೆಯ ಸಾರಿ ಆತನು, <<ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?>> ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, <<ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ>> ಎಂದನು. ಆಗ ಅವನಿಗೆ ಯೇಸು <<ನನ್ನ ಕುರಿಗಳನ್ನು ಮೇಯಿಸು>> ಎಂದನು.18<<ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು>> ಎಂದು ಹೇಳಿದನು.19ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆ ಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ <<ನನ್ನನ್ನು ಹಿಂಬಾಲಿಸು>> ಎಂದು ಹೇಳಿದನು.20ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, <<ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?>> ಎಂದು ಕೇಳಿದವನೇ.21ಇವನನ್ನು ಪೇತ್ರನು ನೋಡಿ ಯೇಸುವಿಗೆ, <<ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?>> ಎಂದು ಕೇಳಲು,22ಯೇಸು ಅವನಿಗೆ <<ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು>> ಎಂದು ಹೇಳಿದನು.23ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. <<ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?>> ಎಂದು ಮಾತ್ರ ಹೇಳಿದನು.24ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.25 ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.
ಅಪೊಸ್ತಲರ ಕೃತ್ಯಗಳ
1ಯೇಸು ಸ್ವರ್ಗಾರೋಹಣವಾದದ್ದು
1ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,2ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.3ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.4ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, <<ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,5ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು>> ಎಂದು ಅಪ್ಪಣೆ ಕೊಟ್ಟನು.6ಕೂಡಿಬಂದವರು ಆತನನ್ನು,, <<ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?>> ಎಂದು ಕೇಳಲು7ಆತನು ಅವರಿಗೆ, <<ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ>> ಅಂದನು.9ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.10ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು.11ಅವರ ಹತ್ತಿರ ನಿಂತುಕೊಂಡು <<ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು>> ಎಂದು ಹೇಳಿದರು.12ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.13ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.14ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.ಇಸ್ಕರಿಯೂತ ಯೂದನ ಬದಲಾಗಿ ಮತ್ತೀಯನನ್ನು ಆರಿಸಿಕೊಂಡದ್ದು
15ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,16<<ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.17ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.>>18(ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.19ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)20ಅವನ ವಿಷಯವಾಗಿ,ಅವನ ಮನೆ ಹಾಳಾಗಲಿ,
ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ
ಅವನ
ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.
21-22ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು23ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ24-25ಮತ್ತೀಯನನ್ನೂ ಎಂಬ ಇಬ್ಬರನು ನಿಲ್ಲಿಸಿ ಪ್ರಾರ್ಥನೆ ಮಾಡುತ್ತಾ, <<ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು>> ಎಂದು ಪ್ರಾರ್ಥಿಸಿದರು.26ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.
2ಪವಿತ್ರಾತ್ಮನು ಬಂದದ್ದು
1ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.2ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.3ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.5ಅಂದು ಜಗತ್ತಿನ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.6ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.7ಎಲ್ಲರೂ ವಿಸ್ಮಯದಿಂದ ಬೆರಗಾಗಿ, <<ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.8ಆದರೆ ನಾವು ಪ್ರತಿಯೊಬ್ಬರು ನಮ್ಮನಮ್ಮ ಮಾತೃಭಾಷೆಯಲ್ಲಿ ಇವರು ಮಾತನಾಡುವುದನ್ನು ಕೇಳುತ್ತಿದ್ದೇವಲ್ಲಾ, ಇದು ಹೇಗೆ?9ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತೋಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,10ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ11ಆಗಿರುವ ನಾವು ನಮ್ಮನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ>> ಎಂದು ಅಂದುಕೊಂಡರು.12ಎಲ್ಲರೂ ಬೆರಗಾಗಿ ಕಳವಳಗೊಂಡು, <<ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?>>13ಆದರೆ ಬೇರೆ ಕೆಲವರು, <<ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ>> ಮಾಡಿದರು.ಜನಸಮೂಹಕ್ಕೆ ಪೇತ್ರನ ಪ್ರಬೋಧನೆ
14ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; <<ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.15ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.16ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನಂದರೆ,
17<<ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು,ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು;
ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;
ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
18ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂನನ್ನ ಆತ್ಮವನ್ನು ಸುರಿಸುವೆನು,
ಅವರೂ ಪ್ರವಾದಿಸುವರು.
19-20ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ
ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು.
ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು.
ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
21ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ>> ಎಂಬುದೇ. 22<<ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.23ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆಜಡಿದು ಕೊಂದಿರಿ.24ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.25ಆತನ ವಿಷಯದಲ್ಲಿ ದಾವೀದನು;,<< <ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು;
ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
26ಆದಕಾರಣ ನನ್ನ ಹೃದಯವು ಹರ್ಷಿಸಿತು;ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು,
ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು;
27ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ,ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ.
28ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ;ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ> ಎಂದು ಹೇಳಿದ್ದಾನೆ.
29<<ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.30ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.31ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.32ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.33ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.34-35ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ,<< <ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ
ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು> ಎಂಬುದೇ.
36<<ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ>> ಎಂದು ಹೇಳಿದನು.37ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, <<ಸಹೋದರರೇ, ನಾವೇನು ಮಾಡಬೇಕು>> ಎಂದು ಕೇಳಲು;38ಪೇತ್ರನು ಅವರಿಗೆ, <<ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.39ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ>> ಎಂದು ಹೇಳಿದನು.40ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, <<ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ>> ಎಂದು ಅವರನ್ನು ಎಚ್ಚರಿಸಿದನು.41ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.42ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.43ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು.44ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.45ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.46ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.47ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು. 3ಹುಟ್ಟುಕುಂಟನು ನಡೆದಾಡಿದ್ದು
1ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.2ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.3ಅವನು ದೇವಾಲಯದೊಳಕ್ಕೆ ಹೋಗುತ್ತಿರುವ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಬೇಡಿದನು.4ಪೇತ್ರ, ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು ಅವನಿಗೆ <<ನಮ್ಮನ್ನು ನೋಡು>> ಅಂದನು.5ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ, ಅವರನ್ನು ಲಕ್ಷ್ಯವಿಟ್ಟು ನೋಡಿದನು.6ಆಗ ಪೇತ್ರನು <<ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ>> ಎಂದು ಹೇಳಿ,7ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲುಗಳಿಗೆ, ಮುಂಗಾಲುಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು.8ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.9ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರು ನೋಡಿ;10ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು.ಆಶ್ಚರ್ಯಪಟ್ಟು ಜನರಿಗೆ ಪೇತ್ರನ ಪ್ರಸಂಗ
11ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೋಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು.12ಪೇತ್ರನು ಇದನ್ನು ನೋಡಿ ಜನರಿಗೆ; <<ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.13ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.14ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.15ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.16ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.17<<ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.18ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.19ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ20ಪುನರುಜ್ಜೀವನದ ಕಾಲಗಳು ಒದಗಿ ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು.21ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.22ಮೋಶೆಯು ಹೇಳಿದ್ದೇನಂದರೆ, <ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು.23ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು> ಎಂಬುದೇ.24ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು.25ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ <ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು> ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.26ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ>> ಎಂದು ಹೇಳಿದನು.
4ಅಧಿಕಾರಿಗಳ ಮುಂದೆ ಪೇತ್ರ ಯೋಹಾನರು
1ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.2ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.3ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.4ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದುಸಾವಿರಕ್ಕೆ ಏರಿತು.5ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.6ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು.7ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ <<ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ>> ಎಂದು ಕೇಳಲು,8ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; <<ಅಧಿಕಾರಿಗಳೇ, ಹಿರಿಯರೇ,9ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ.10ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.11<<ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.12ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ>> ಎಂದು ಹೇಳಿದನು.13ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.14ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು.15ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,,16<<ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.17ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನುಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.>>18ಆಗಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು.19ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ <<ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;20ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು>> ಎಂದು ಉತ್ತರಕೊಟ್ಟರು.21ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.22ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.23ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.24ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, <<ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,25ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ,<< <ಅನ್ಯಜನಗಳು ಏಕೆ ಆಕ್ರೋಶಗೊಂಡರು?
ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು?
26ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು,
ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು> ಎಂದು ಹೇಳಿಸಿದಿಯಲ್ಲವೇ?
27ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,28ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.29ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ30ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು>> ಅಂದರು.31ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.ವಿಶ್ವಾಸಿಗಳು ಒಟ್ಟಾಗಿ ಆಸ್ತಿಯನ್ನು ಅನುಭೋಗಿಸುತ್ತಿದ್ದರು
32ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.33ಮತ್ತು ಕರ್ತನಾದ ಯೇಸುವಿನ ಪುನುರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.34ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು35ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು.36ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.37ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು. 5ಅನನೀಯ ಮತ್ತು ಸಪ್ಫೈರಳು
1ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ2ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.3ಆಗ ಪೇತ್ರನು; <<ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?4ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ>> ಅಂದನು.5ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.6ಆಗ ಯೌವನಸ್ಥರು ಎದ್ದು ಅವನ ಶವವನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು.7ಇದಾದ ಸುಮಾರು ಮೂರು ಗಂಟೆಗಳ ನಂತರ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.8ಪೇತ್ರನು ಆಕೆಯನ್ನು ನೋಡಿ, <<ನೀವು ಆ ಹೊಲವನ್ನು ಮಾರಿದ್ದು ಇಷ್ಟೇ ಹಣಕ್ಕೋ? ನನಗೆ ಹೇಳು>> ಎಂದು ಕೇಳಲು ಆಕೆಯು, <<ಹೌದು, ಇಷ್ಟಕ್ಕೇ>> ಅಂದಳು.9ಆಗ ಪೇತ್ರನು ಆಕೆಗೆ, <<ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು>> ಎಂದು ಹೇಳಿದನು.10ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.11ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು.ಸೂಚಕಕಾರ್ಯಗಳು ಮತ್ತು ಅದ್ಭುತಕಾರ್ಯಗಳು
12ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.13ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು.14ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು.15ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.16ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದೆವ್ವ ಪೀಡಿತರನ್ನು ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು.ಅಪೊಸ್ತಲರಿಗೆ ಆದ ಹಿಂಸೆ
17ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,18ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.19ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,20<<ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ>> ಅಂದನು.21ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.22ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು,23<<ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ>> ಎಂದು ತಿಳಿಸಿದರು.24ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.25ಅಷ್ಟರಲ್ಲಿ ಒಬ್ಬನು ಬಂದು; <<ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು>> ಅವರಿಗೆ ತಿಳಿಸಿದನು.26ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.27ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ,28<<ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ>> ಎಂದು ಹೇಳಿದನು.29ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, <<ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.30ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.31ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.32ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ>> ಎಂದು ಹೇಳಿದರು.ಗಮಲಿಯೇಲನ ಸಮರ್ಥನೆ
33ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು.34ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.35ಅನಂತರ ಸಭೆಯವರಿಗೆ, <<ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಕುರಿತು ಎಚ್ಚರಿಕೆಯುಳ್ಳವರಾಗಿರಿ.36ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.37ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.38ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;39ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ>> ಎಂದು ಹೇಳಿದನು.40ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.41ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.42ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.
6ಸೇವಾಕಾರ್ಯಕ್ಕೆ ಏಳು ಮಂದಿಯನ್ನು ನೇಮಿಸಿದ್ದು
1ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.2ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಒಟ್ಟುಗೂಡಿಸಿ, <<ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುವುದು ಸರಿಯಲ್ಲವಲ್ಲಾ.3ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.4ನಾವಾದರೋ ಪ್ರಾರ್ಥನೆಯನ್ನೂ, ವಾಕ್ಯೋಪದೇಶವನ್ನೂ ಮಾಡುವುದರಲ್ಲಿ ನಿರತರಾಗಿರುವೆವು>> ಎಂದು ಹೇಳಿದರು.5ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನನನ್ನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.6ಅಪೊಸ್ತಲರು ಅವರ ಮೇಲೆ ಕೈಗಳನ್ನಿಟ್ಟು ಪ್ರಾರ್ಥನೆಮಾಡಿ ಆ ಕಾರ್ಯಕ್ಕಾಗಿ ಅವರನ್ನು ನೇಮಿಸಿದರು.7ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.ಸ್ತೆಫನನ್ನು ಬಂಧಿಸಿದ್ದು
8ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.9ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.10ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.11ಆಗ ಅವರು ಕೆಲವು ಜನರಿಗೆ, <<ಇವನು ಮೋಶೆಗೆ ವಿರೋಧವಾಗಿಯೂ, ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವುದನ್ನು ಕೇಳಿದೆವೆಂದು>> ಹೇಳಿರಿ ಎಂದು ಕೆಲವರನ್ನು ಮನವೊಲಿಸಿದರು.12ಅವರು ಜನರನ್ನೂ, ಹಿರಿಯರನ್ನೂ, ಶಾಸ್ತ್ರಿಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು.13ಆ ಸಾಕ್ಷಿಗಳು, <<ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.14ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ>> ಅಂದರು.15ಆಗ ಹಿರೀಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು.
7ಸ್ತೆಫನನ ಬೋಧನೆ
1ಆಗ ಮಹಾಯಾಜಕನು, <<ಈ ಸಂಗತಿಗಳು ಸತ್ಯವೋ?>> ಎಂದು ಸ್ತೆಫನನನ್ನು ಕೇಳಿದ್ದಕ್ಕೆ ಅವನು, <<ಸಹೋದರರೇ, ತಂದೆಗಳೇ, ಕೇಳಿರಿ.2ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;3<ನೀನು, ನಿನ್ನ ಸ್ವದೇಶವನ್ನೂ, ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು> ಎಂದು ಹೇಳಿದನು.4<<ಆಗ ಅವನು ಕಲ್ದೀಯರ ದೇಶದಿಂದ ಹೊರಟುಹೋಗಿ, ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ, ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು.5ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವಾಸ್ತ್ಯವಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವಾಸ್ತ್ಯವಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.6ಇದಲ್ಲದೆ ದೇವರು ಹೇಳಿದ್ದೇನಂದರೆ, <ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.>7ಮತ್ತು <ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು> ಎಂಬುದೇ.8ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಮೂಲಪಿತೃಗಳನ್ನು ಪಡೆದನು.9<<ಮೂಲಪಿತೃಗಳು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,10ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.11<<ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪಿತೃಗಳಿಗೆ ಆಹಾರ ಸಿಕ್ಕಲಿಲ್ಲ.12ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಯಾಕೋಬನು ಕೇಳಿ, ನಮ್ಮ ಪಿತೃಗಳನ್ನು ಮೊದಲ ಸಾರಿ ಅಲ್ಲಿಗೆ ಕಳುಹಿಸಿದನು.13ಅವರು ಎರಡನೆಯ ಸಾರಿ ಬಂದಾಗ ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡಿದನು. ಮತ್ತು ಯೋಸೇಫನ ವಂಶವು ಫರೋಹನಿಗೆ ತಿಳಿದು ಬಂದಿತು.14ಆ ಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ಮತ್ತು ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಐಗುಪ್ತದೇಶಕ್ಕೆ ಕರೆಸಿಕೊಂಡನು.15ಯಾಕೋಬನು ಇಗುಪ್ತದೇಶಕ್ಕೆ ಬಂದು. ಅಲ್ಲಿ ಅವನೂ ಮತ್ತು ನಮ್ಮ ಪಿತೃಗಳೂ ತೀರಿಹೋದರು.16ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.17<<ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಸಮೀಪಿಸುವಷ್ಟರಲ್ಲಿ ನಮ್ಮ ಜನರು ಐಗುಪ್ತ ದೇಶದಲ್ಲಿ ಹೆಚ್ಚಿ ಬಹಳವಾದರು.18ಕಡೆಗೆ ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳ್ವಿಕೆಗೆ ಬಂದನು.19ಈ ಅರಸನು ನಮ್ಮ ಪಿತೃಗಳ ವಿರುದ್ಧವಾಗಿ ಕುಯುಕ್ತಿಯನ್ನು ಯೋಚಿಸಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ, ನಮ್ಮ ಪಿತೃಗಳನ್ನು ಕ್ರೂರವಾಗಿ ಹಿಂಸಿಸಿಸನು.20ಆ ಸಮಯದಲ್ಲೇ ಮೋಶೆಯು ಹುಟ್ಟಿದನು. ಅವನು ದಿವ್ಯಸುಂದರನಾಗಿದ್ದನು ಮತ್ತು ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.21ಆ ಮೇಲೆ ಅವನನ್ನು ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.22ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ತಿಳಿವಳಿಕೆಯುಳ್ಳವನಾಗಿ ಮಾತುಗಳಲ್ಲಿಯೂ, ಕಾರ್ಯಗಳಲ್ಲಿಯೂ ಸಮರ್ಥನಾದನು.23<<ಅವನಿಗೆ ನಲವತ್ತು ವರುಷ ವಯಸ್ಸು ತುಂಬುತ್ತಾ ಇರಲು, ಇಸ್ರಾಯೇಲ್ ವಂಶಸ್ಥರಾದ ತನ್ನ ಸಹೋದರರನ್ನು ಹೋಗಿ ನೋಡಬೇಕೆಂಬ ಆಸೆಯು ಅವನ ಹೃದಯದಲ್ಲಿ ಹುಟ್ಟಿತು.24ಅವರಲ್ಲಿ ಒಬ್ಬನಿಗೆ ಅನ್ಯಾಯವಾಗುವುದನ್ನು ಅವನು ನೋಡಿ, ಅವನಿಗೆ ಆಶ್ರಯಕೊಟ್ಟು ಪೀಡಿಸುವ ಐಗುಪ್ತ್ಯನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು.25ಹೀಗೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬುದು ತನ್ನ ಸಹೋದರರಿಗೆ ತಿಳಿದುಬರುವುದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳಿದುಕೊಳ್ಳಲಿಲ್ಲ.26ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, <ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?> ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.27<<ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, <ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?28ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ?> ಎಂದು ಅವನನ್ನು ನೂಕಿಬಿಟ್ಟನು.29ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್ ದೇಶದಲ್ಲಿ ಪ್ರವಾಸಿಯಾಗಿದನು. ಅಲ್ಲಿ ಅವನು ಇಬ್ಬರು ಗಂಡು ಮಕ್ಕಳನ್ನು ಪಡೆದನು.30<<ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.31ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ಇದೇನೆಂದು, ಅದನ್ನು ಸ್ಪಷ್ಟವಾಗಿ ನೋಡಬೇಕೆಂದು ಹತ್ತಿರ ಬರಲು,32<ನಾನು ನಿನ್ನ ಪಿತೃಗಳಾದ, ಅಬ್ರಹಾಮ ಇಸಾಕ ಯಾಕೋಬರ ದೇವರು> ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.33ಮತ್ತು ಕರ್ತನು ಅವನಿಗೆ, <ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು.34ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ,> ಎಂದು ಹೇಳಿದನು.35<<ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ <ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?> ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.36ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರುಷ ಮರಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.37ಆ ಮೋಶೆಯೇ, <<ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು>> ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.38ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪಿತೃಗಳಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.39<<ಆದರೆ ನಮ್ಮ ಪಿತೃಗಳು ಅವನ ಮಾತುಗಳನ್ನು ಕೇಳುವುದಕ್ಕೆ ಮನಸ್ಸಿಲ್ಲದೆ ಅವನನ್ನು ತಳ್ಳಿಬಿಟ್ಟು, ಪುನಃ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.40<<ಅವರು ಆರೋನನಿಗೆ, <ಐಗುಪ್ತದೇಶದಿಂದ ನಮ್ಮನ್ನು ಕರದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ಆದುದರಿಂದ ನಮಗೆ ಮುಂದಾಗಿ ಹೋಗುವುದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು> ಎಂದು ಕೇಳಿಕೊಂಡರು.41ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನು ಅರ್ಪಿಸಿ ತಮ್ಮ ಕೈಗಳಿಂದ ನಿರ್ಮಿಸಿದ ವಸ್ತುವಿನಲ್ಲಿ ಉಲ್ಲಾಸ ಪಟ್ಟರು.42ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ,<< <ಇಸ್ರಾಯೇಲ್ ವಂಶದವರೇ, ನೀವು
ಅರಣ್ಯದಲ್ಲಿದ್ದ ನಲವತ್ತು ವರುಷ
ನನಗೆ ಯಜ್ಞಗಳನ್ನೂ, ಬಲಿಗಳನ್ನೂ
ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;
43ಅದಕ್ಕೆ ಬದಲಾಗಿ ನೀವು ಆರಾಧಿಸಬೇಕೆಂದುಮಾಡಿಕೊಂಡ ಮೂರ್ತಿಗಳನ್ನು
ಅಂದರೆ ಮೊಲೋಖನ ಗುಡಾರವನ್ನೂ
ರೆಫಾನ್ ದೇವತೆಯ ನಕ್ಷತ್ರರೂಪವನ್ನೂ
ಹೊತ್ತುಕೊಂಡು ಹೋಗುತ್ತಿದ್ದಿರಲ್ಲಾ.
ಆದುದರಿಂದ ನಾನು ನಿಮ್ಮನ್ನು ಬಾಬೆಲೋನಿನ ಆಚೆಗೆ
ಗಡಿಪಾರು ಮಾಡುವೆನು> ಎಂಬುದೇ ಆಗಿದೆ.
44<<ದೇವದರ್ಶನ ಗುಡಾರವು ಮರಭೂಮಿಯಲ್ಲಿ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.45ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.46ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.47ಆದರೆ ದೇವರಿಗೋಸ್ಕರ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.48ಆದರೂ ಪರಾತ್ಪರನು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.49<< <ಆಕಾಶವು ನನಗೆ ಸಿಂಹಾಸನ,ಭೂಮಿಯು ನನ್ನ ಪಾದಗಳಿಗೆ ಪೀಠ;
ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ?
ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?
50ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾಎಂಬುದಾಗಿ ಕರ್ತನು ಹೇಳುತ್ತಾನೆ> ಎಂದು ಪ್ರವಾದಿಯು ನುಡಿದಿದ್ದಾನೆ.
51<<ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.52ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.53ದೇವದೂತರ ಮೂಲಕ ನೇಮಕವಾದ ಧರ್ಮಶಾಸ್ತ್ರವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ>> ಎಂದು ಹೇಳಿದನು.ಸ್ತೆಫನನ ಮೇಲೆ ಕಲ್ಲೆಸೆದದ್ದು
54ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.55ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೇನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು;56<<ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ>> ಎಂದು ಹೇಳಿದನು.57ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು,58ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.59ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, <<ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ>> ಎಂದು ಪ್ರಾರ್ಥಿಸಿ,60ಮೊಣಕಾಲೂರಿ, <<ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು>> ಮಹಾಶಬ್ದದಿಂದ ಕೂಗಿದನು.ಇದನ್ನು ಹೇಳಿ ನಿದ್ರೆಹೋದನು.
81ಸೌಲನಿಗೆ ಅವನನ್ನು ಕೊಂದದ್ದು ಸಮ್ಮತವಾಯಿತು.ಸಭೆ ಹಿಂಸೆಗೆ ಗುರಿಯಾದದ್ದು ಮತ್ತು ಚದರಿಹೋದದ್ದು
ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೋಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.
2ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.3ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.ಫಿಲಿಪ್ಪನು ಸಮಾರ್ಯದಲ್ಲಿ ಸುವಾರ್ತೆಯನ್ನು ಘೋಷಿಸಿದ್ದು; ಹಾಗು ಸೀಮೋನನೆಂಬ ಮಂತ್ರವಾದಿಯನ್ನು ಕುರಿತದ್ದು
4ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.5ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.6ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು.7ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.8ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.9ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.10ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, <<ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ>> ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.11ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು.12ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.13ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.14ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.15ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.16ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು17ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.18ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,19<<ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ>> ಅಂದನು.20ಆದರೆ ಪೇತ್ರನು ಅವನಿಗೆ, <<ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?21ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.22ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.23ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ>> ಅಂದನು24ಅದಕ್ಕೆ ಸೀಮೋನನು, <<ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ>> ಎಂದು ಹೇಳಿದನು.25ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.ಫಿಲಿಪ್ಪನು ಇಥಿಯೋಪ್ಯದವನಿಗೆ ಸುವಾರ್ತೆಯನ್ನು ತಿಳಿಸಿದ್ದು
26ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, <<ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ>> ಎಂದು ಹೇಳಿದನು.27ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಶದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.28ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.29ದೇವರಾತ್ಮನು ಫಿಲಿಪ್ಪನಿಗೆ, <<ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ>> ಎಂದು ಹೇಳಿದನು.30ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, <<ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?>> ಎಂದು ಕೇಳಿದನು.31ಅದಕ್ಕೆ ಅವನು, <<ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?>> ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.32ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ,<<ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು;
ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ
ಆತನು ಬಾಯಿ ತೆರೆಯದೆ ಮೌನವಾಗಿದ್ದನು.
33ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ.ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು?
ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ>> ಎಂಬುದೇ.
34ಕಂಚುಕಿಯು ಈ ವಚನವನ್ನು ಕುರಿತು, <<ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?>> ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು35ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.36ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.37ಕಂಚುಕಿಯು, <<ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?>> ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;38ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.39ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.40ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು. 9ಸೌಲನು ಯೇಸುವಿನ ಶಿಷ್ಯನಾದದ್ದು
1ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಸೆಪಡುತ್ತಾ ಮಹಾಯಾಜಕನ ಬಳಿಗೆ ಹೋಗಿ;2ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು ,ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.3ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು, ಫಕ್ಕನೆ ಆಕಾಶದಿಂದ ಒಂದು ಬೆಳಕು ಅವನ ಸುತ್ತಲು ಮಿಂಚಿತು.4ಅವನು ನೆಲಕ್ಕೆ ಬಿದ್ದನು. ಆಗ, <<ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?>> ಎಂದು ಹೇಳುವ ವಾಣಿಯನ್ನು ಕೇಳಿದನು.5ಅದಕ್ಕೆ ಸೌಲನು;, <<ಕರ್ತನೇ, ನೀನಾರು?>> ಎಂದು ಕೇಳಿದ್ದಕ್ಕೆ, ಕರ್ತನು, <<ನೀನು ಹಿಂಸೆಪಡಿಸುವ ಯೇಸುವೇ ನಾನು;6ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು>> ಎಂದು ಹೇಳಿದನು.7ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ, ಯಾರನ್ನೂ ಕಾಣದೆ ಮೂಕರಂತೆ ವಿಸ್ಮಿತರಾಗಿ ನಿಂತರು.8ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.9ಅವನು ಮೂರು ದಿನಗಳು ಕಣ್ಣುಕಾಣದೆ, ಏನೂ ತಿನ್ನಲಿಲ್ಲ ಮತ್ತು ಏನೂ ಕುಡಿಯದೇ ಇದ್ದನು.10ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; <<ಅನನೀಯನೇ,>> ಎಂದು ಅವನನ್ನು ಕರೆಯಲು, ಅವನು; <<ಕರ್ತನೇ, ಇಗೋ, ಇದ್ದೇನೆ>> ಅಂದನು.11ಕರ್ತನು ಅವನಿಗೆ, <<ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ.12ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ಪುನಃ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಟ್ಟು ಪ್ರಾರ್ಥನೆಮಾಡುವುದನ್ನು ದರ್ಶನದಲ್ಲಿ ನೋಡಿದ್ದಾನೆ>> ಎಂದು ಹೇಳಿದನು.13ಅದಕ್ಕೆ ಅನನೀಯನು, <<ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.14ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ>> ಅಂದನು.15ಕರ್ತನು ಅವನಿಗೆ, <<ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.16ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು>> ಎಂದು ಹೇಳಿದನು.17ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, <<ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ>> ಎಂದು ಹೇಳಿದನು.18ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.19ತರುವಾಯ ಊಟಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿನಗಳು ಇದ್ದನು.20ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.21ಕೇಳಿದವರೆಲ್ಲರು ಬೆರಗಾಗಿ; <<ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ>> ಎಂದು ಮಾತನಾಡಿಕೊಂಡರು.22ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.23ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.24ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.25ಆದರೆ ಸೌಲನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ, ಒಂದು ಪುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಮಗ್ಗುಲಲ್ಲಿ ಇಳಿಸಿದರು.26ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.27ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.28ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು.29ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತನಾಡಿ ತರ್ಕಮಾಡುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡುತ್ತಿದ್ದರು.30ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರದುಕೊಂಡುಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.31ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.ಐನೇಯನು ವಾಸಿಯಾದದ್ದು
32ಪೇತ್ರನು ಎಲ್ಲಾ ಕಡೆಗಳಲ್ಲಿಯೂ ಸಂಚಾರಮಾಡುತ್ತಿರುವಾಗ, ಲುದ್ದದಲ್ಲಿ ವಾಸವಾಗಿದ್ದ ದೇವಜನರ ಬಳಿಗೂ ಬಂದನು.33ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.34ಪೇತ್ರನು ಅವನಿಗೆ, <<ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ>> ಎಂದು ಹೇಳಿದನು. ಕೂಡಲೆ ಅವನು ಎದ್ದನು.35ಮತ್ತು ಲುದ್ದದಲ್ಲಿಯೂ, ಶಾರೋನನಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿ, ಅವರು ಕರ್ತನ ಕಡೆಗೆ ತಿರುಗಿಕೊಂಡರು.ಸತ್ತುಹೋಗಿದ್ದ ದೊರ್ಕಳೆಂಬ ಒಬ್ಬ ಶಿಷ್ಯಳನ್ನು ಬದುಕಿಸಿದ್ದು
36ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ <<ದೊರ್ಕ>> ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.37ಆ ಕಾಲದಲ್ಲಿ ಆಕೆ ರೋಗಕ್ಕೆ ತುತ್ತಾಗಿ ಸತ್ತಳು. ಆಕೆಯ ಶವವನ್ನು ಸ್ನಾನಮಾಡಿಸಿ ಮೇಲಂತಸ್ತಿನಲ್ಲಿಟ್ಟರು.38ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ, <<ತಡಮಾಡದೆ ನಮ್ಮ ಹತ್ತಿರಕ್ಕೆ ಬರಬೇಕೆಂದು>> ಬೇಡಿಕೊಂಡರು.39ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.40ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; <<ತಬಿಥಾ, ಎದ್ದೇಳು>> ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.41ಅವನು ಆಕೆಯನ್ನು ಕೈಹಿಡಿದು ಎಬ್ಬಿಸಿ, ಅಲ್ಲಿದ್ದ ವಿಧವೆಯರನ್ನು ಮತ್ತು ದೇವಜನರನ್ನೂ ಕರೆದು, ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.42ಈ ಸಂಗತಿಯು ಯೊಪ್ಪದಲ್ಲೆಲ್ಲಾ ಹರಡಿ ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.43ಆ ಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮದ ಕೆಲಸ ಮಾಡುವ ಸೀಮೋನನೆಂಬುವನ ಬಳಿಯಲ್ಲಿ ಬಹಳ ದಿನಗಳ ವರೆಗೂ ಇದ್ದನು.
10ಪೇತ್ರನು ಮತ್ತು ಕೊರ್ನೇಲ್ಯನು
1ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.2ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.3ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; <<ಕೊರ್ನೆಲ್ಯನೇ>> ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.4ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; <<ಕರ್ತನೇ, ಇದೇನು?>> ಎಂದು ಕೇಳಲು, ಆ ದೂತನು ಅವನಿಗೆ; <<ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.5ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು.6ಅವನು ಚಮ್ಮಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರತೀರದ ಬಳಿಯಲ್ಲಿ ಇದೆ>> ಎಂದು ಹೇಳಿದನು.7ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,8ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರವಾಗಿ ಹೇಳಿ, ಅವರನ್ನು ಯೊಪ್ಪಕ್ಕೆ ಪಟ್ಟಣಕ್ಕೆ ಕಳುಹಿಸಿದನು.ಪೇತ್ರನಿಗಾದ ದರ್ಶನ
9ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.10ಅವನಿಗೆ ಬಹಳ ಹಸಿವಾಗಿ ಊಟಮಾಡ ಬಯಸಿದನು. ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ,11ಅವನು ಧ್ಯಾನಪರವಶನಾಗಿ ಆಕಾಶವು ತೆರೆದಿರುವುದನ್ನೂ, ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವುದನ್ನೂ ಕಂಡನು.12ಅದರೊಳಗೆ ಸಕಲ ವಿಧವಾದ ಪಶುಗಳೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳೂ ಇದ್ದವು.13ಆಗ; <<ಪೇತ್ರನೇ, ಎದ್ದು, ಕೊಯ್ದು ತಿನ್ನು>> ಎಂದು ಅವನಿಗೆ ಒಂದು ವಾಣಿ ಕೇಳಿಸಿತು.14ಅದಕ್ಕೆ ಪೇತ್ರನು; <<ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ>> ಅಂದನು.15ಅದಕ್ಕೆ;<<ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದೆಂದು>> ಪುನಃ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.16ಹೀಗೆ ಮೂರು ಸಾರಿ ಆಯಿತು. ಆದ ಮೇಲೆ ಆ ವಸ್ತುವು ಆಕಾಶದೊಳಗೆ ಸೇರಿಕೊಂಡಿತು.17ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು;18ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.19ಪೇತ್ರನು ಆ ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; <<ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;20ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆ>> ಎಂದು ಹೇಳಿದನು.21ಪೇತ್ರನು ಕೆಳಗಿಳಿದು ಆ ಮನುಷ್ಯರ ಬಳಿಗೆ ಬಂದು; <<ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು?>> ಎಂದು ಕೇಳಲು,22ಅವರು; <<ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ>> ಎಂದು ಹೇಳಿದರು.23ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪ ಪಟ್ಟಣದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.ಕೊರ್ನೇಲ್ಯನ ಮನೆಯಲ್ಲಿ ಪೇತ್ರನು
24ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು.25ಪೇತ್ರನು ಬಂದಾಗ ಕೊರ್ನೆಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.26ಆದರೆ ಪೇತ್ರನು; <<ಏಳು, ನಾನೂ ಸಹಾ ಮನುಷ್ಯನೇ>> ಎಂದು ಹೇಳಿ, ಅವನನ್ನು ಎತ್ತಿ,27ಅವನ ಸಂಗಡ ಸಂಭಾಷಣೆಮಾಡುತ್ತಾ ಮನೆಯೊಳಕ್ಕೆ ಬಂದನು.28ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; <<ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮ್ಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.29ಆದಕಾರಣ ನೀವು ನನ್ನನ್ನು ಕರೆಕಳುಹಿಸಿದಾಗ ನಾನು ಯಾವ ಎದುರುಮಾತನ್ನೂ ಆಡದೆ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನನಗೆ ತಿಳಿಸಬೇಕು>> ಎಂದು ಕೇಳಿದನು.30ಅದಕ್ಕೆ ಕೊರ್ನೇಲ್ಯನು; <<ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು;31ಕೊರ್ನೆಲ್ಯನೇ <ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.32ನೀನು ಯಾರನ್ನಾದರು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ> ಅಂದನು.33ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ>> ಅಂದನು.34ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; <<ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,35ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.36ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.37ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು.38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.39ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.40ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು.41ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.42ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.43ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ>> ಅಂದನು.44ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು.45ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,46ಅನ್ಯಜನಗಳಿಗೂ ಪವಿತ್ರಾತ್ಮನ ದಾನವಾಯಿತಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು.47ನಡೆದ ಸಂಗತಿಯನ್ನು ಪೇತ್ರನು ನೋಡಿ; <<ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?>> ಎಂದು ಹೇಳಿ ಅವರಿಗೆ,48ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು.
11ಪೇತ್ರನು ಯೆರೂಸಲೇಮಿನ ಸಭೆಯಲ್ಲಿ ಪ್ರತಿವಾದ ಮಾಡಿದ್ದು
1ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.2ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿಮಾಡಿಸಿಕೊಂಡಿದ್ದ ಯೆಹೂದ್ಯರು;3<<ನೀನು ಸುನ್ನತಿಯಿಲ್ಲದವರಲ್ಲಿ ಸೇರಿ ಅವರ ಸಂಗಡ ಊಟಮಾಡಿದೆಯಲ್ಲಾ>> ಎಂದು ಅವನ ಕೂಡ ವಾದಿಸಿದರು.4ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿಂದ ಕ್ರಮವಾಗಿ ವಿವರಿಸಿ,5ಹೇಳಿದ್ದೇನಂದರೆ; <<ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು>> ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.6ಅದೇನೆಂದು ತಿಳಿದುಕೊಳ್ಳುವುದಕ್ಕೆ ನಾನು ಅದನ್ನು ಚೆನ್ನಾಗಿ ನೋಡಿದಾಗ, ಭೂಮಿಯ ಮೇಲಿರುವ ಎಲ್ಲಾ ಪ್ರಾಣಿಗಳು, ಕಾಡುಮೃಗಳು, ಹರಿದಾಡುವ ಕ್ರಿಮಿಕೀಟಗಳನ್ನೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳನ್ನೂ ಕಂಡೆನು.7ಆಗ; <<ಪೇತ್ರನೇ, ಎದ್ದು, ಕೊಯ್ದು ತಿನ್ನು>> ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು.8ಅದಕ್ಕೆ ನಾನು; <<ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ>> ಅಂದೆನು.9ಅದಕ್ಕೆ; <<ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು>> ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು.10ಹೀಗೆ ಮೂರು ಸಾರಿ ಆಯಿತು. ಅನಂತರ ಎಲ್ಲವೂ ತಿರುಗಿ ಆಕಾಶಕ್ಕೆ ಎತ್ತಲ್ಪಟ್ಟಿತು.11ಆ ಕ್ಷಣದಲ್ಲೇ ಮೂವರು ಪುರುಷರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.12ದೇವರಾತ್ಮನು, ನನಗೆ ನೀನು ಏನೂ ಬೇಧಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.13ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ, ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವುದನ್ನು ಕಂಡೆನು. ಆ ದೂತನು; <<ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು.14ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು>> ಎಂದು ಹೇಳಿದನೆಂಬುದಾಗಿ ತಿಳಿಸಿದನು.15ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.16ಆಗ; <<ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು>> ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.17ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.18ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; <<ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ>> ಎಂದು ದೇವರನ್ನು ಕೊಂಡಾಡಿದರು.ಅಂತಿಯೋಕ್ಯ ಪಟ್ಟಣದಲ್ಲಿ ಕ್ರೈಸ್ತಸಭೆ
19ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನೀಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.20ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.21ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.22ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.23ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.24ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು.25ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು.26ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.ಅಂತಿಯೋಕ್ಯ ಸಭೆಯ ಸಹಾಯ
27ಅ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.28ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮ ನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.29ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.30ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.
12ಪೇತ್ರನನ್ನು ಸೆರೆಯಿಂದ ಹಾಕಿಸಿದ್ದು
1ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು.2ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.3ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.4ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.5ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.ದೇವದೂತನು ಪೇತ್ರನನ್ನು ಸೆರೆಯಿಂದ ಬಿಡಿಸಿದ್ದು
6ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.7ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; <<ತಟ್ಟನೆ ಏಳು>> ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.8ಆ ದೂತನು ಅವನಿಗೆ; <<ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ>> ಎಂದು ಹೇಳಲು, ಅವನು ಹಾಗೆಯೇ ಮಾಡಿದನು. <<ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ>> ಅಂದನು.9ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ, ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ತಿಳಿದನು.10ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.11ಆಗ ಪೇತ್ರನು ಎಚ್ಚರಗೊಂಡು; <<ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು>> ಎಂದು ಅಂದುಕೊಂಡನು.12ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.13ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು.14ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಆನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; <<ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ>> ಎಂದು ತಿಳಿಸಿದಳು. ಅವರು ಅವಳಿಗೆ; <<ನಿನಗೆ ಹುಚ್ಚು ಹಿಡಿದದೆ>> ಎಂದು ಹೇಳಿದರು.15ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; <<ಅವನ ದೂತನಾಗಿರಬೇಕು>> ಅಂದರು.16ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.17ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; <<ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು>> ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.18ಬೆಳಗಾದ ಮೇಲೆ ಪೇತ್ರನು ಏನಾದನೆಂದು ಸಿಪಾಯಿಗಳಲ್ಲಿ ಬಹಳ ಕಳವಳ ಉಂಟಾಯಿತು.19ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.ಅರಸನಾದ ಹೆರೋದನು ಸತ್ತದ್ದು
20ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.21ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.22ಕೂಡಿದ್ದ ಜನರು; <<ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ>> ಎಂದು ಆರ್ಭಟಿಸಿದರು.23ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.24ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂದಿತು.25ಬಾರ್ನಬನು ಮತ್ತು ಸೌಲನು ಮಾಡಬೇಕಾದ ಧರ್ಮ ಕಾರ್ಯವನ್ನು ಮುಗಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರದುಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
13ಸುವಾರ್ತೆ ಸಾರುವುದಕ್ಕೆ ಪೌಲನು ಮಾಡಿದ ಮೊದಲನೆಯ ಪ್ರಯಾಣ (13:1, 14:28)
1ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಹೆರೋದನ ರಾಜ್ಯದ ಕಾಲುಭಾಗಕ್ಕೆ ರಾಜನಾದ ಹೆರೋದ ಅಂತಿಪನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.2ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; <<ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ>> ಎಂದು ಹೇಳಿದನು.3ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.4ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.5ಸಲಾಮಿಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.6ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.7ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು.8ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.9ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ,10ಅವನನ್ನು ದೃಷ್ಟಿಸಿನೋಡಿ; <<ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?11ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ>> ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.12ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.ಪಿಸಿದ್ಯದ ಅಂತಿಯೋಕ್ಯದಲ್ಲಿ ಪೌಲ ಮತ್ತು ಬಾರ್ನಬ
13ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.14ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.15ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; <<ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ>> ಎಂದು ಅವರಿಗೆ ಹೇಳಿ ಕಳುಹಿಸಿದರು.16ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ;17<<ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪಿತೃಗಳು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.18ಆತನು ಸುಮಾರು ನಲವತ್ತು ವರುಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು,19ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವಾಸ್ಥ್ಯವಾಗಿ ಹಂಚಿಕೊಟ್ಟನು.20ಇಷ್ಟರೊಳಗೆ ಸುಮಾರು ನಾನೂರೈವತ್ತು ವರುಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.21ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರುಷ ಆಳಿದನು.22ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; <ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು> ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.23<<ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.24ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.25ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; <ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ> ಎಂದು ಹೇಳಿದನು.26<<ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.27ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.28ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.29ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.30<<ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.31ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.32<<ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;33<ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ> ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.34<<ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; <ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ> ಎಂಬುದೆ.35ಅದಕ್ಕೆ ಅನುಸಾರವಾಗಿ ಆತನು; <ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು> ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ.36<<ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.37ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುವು ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.38<<ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.39ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.40ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;
41<< <ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ.ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು;
ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ
ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ> >> ಎಂಬುದೇ ಎಂದು ಹೇಳಿದನು.
42ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.43ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.44ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು.45ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.46ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.47ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗಂದರೆ;ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ
ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.
48ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.49ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು.50ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.51ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.52ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು. 14ಇಕೋನ್ಯ ಪಟ್ಟಣದಲ್ಲಿ ಪೌಲ ಮತ್ತು ಬಾರ್ನಬ
1ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.2ಆದರೆ ನಂಬದೆ ಹೋದ ಯೆಹೂದ್ಯರು, ಅನ್ಯಜನರ ಮನಸ್ಸನ್ನು ಈ ಸಹೋದರರ ವಿರುದ್ಧವಾಗಿ ಪ್ರಚೋದಿಸಿ ಕೆಡಿಸಿದರು.3ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.4ಆಗ ಆ ಊರಿನ ಜನರು ಎರಡು ಭಾಗವಾದರೂ; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.5ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,6ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲೂಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,7ಅವುಗಳಿಗೆ ಸೇರಿರುವ ಸೀಮೆಗೂ ಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು.ಪೌಲ ಮತ್ತು ಬಾರ್ನಬನು ಲುಸ್ತ್ರದಲ್ಲಿ
8ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು.9ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;10<<ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ>> ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು.11ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; <<ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು>> ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.12ಬಾರ್ನಬನನ್ನು ‘ದ್ಯೌಸ್’ ದೇವರೆಂತಲೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು ‘ಹೆರ್ಮೆ’ ದೇವರೆಂತಲೂ ಅಂದುಕೊಂಡರು.13ಊರ ಮುಂದಿದ್ದ ದ್ಯೌಸ್ ದೇವರ ಗುಡಿಯ ಪೂಜಾರಿಯು ಎತ್ತುಗಳನ್ನೂ, ಹೂವಿನ ಹಾರಗಳನ್ನೂ ಊರಬಾಗಿಲಿನ ಹತ್ತಿರಕ್ಕೆ ತಂದು ಜನರೊಂದಿಗೆ ಅವರಿಗೆ ಬಲಿಕೊಡಬೇಕೆಂದಿದ್ದನು.14ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ಜನರ ಗುಂಪಿನೊಳಗೆ ನುಗ್ಗಿ ಹೀಗೆಂದು ಕೂಗಿಹೇಳಿದರು;15<<ಜನರೇ, ನೀವು ಹೀಗೇಕೆ ಮಾಡುತ್ತಿರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.16ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವುದಕ್ಕೆ ಬಿಟ್ಟು ಬಿಟ್ಟನು.17ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ>> ಎಂದು ಹೇಳಿದರು.18ಬಾರ್ನಬ ಮತ್ತು ಪೌಲರು ಈ ಮಾತುಗಳನ್ನು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯಲು ಆಸಾಧ್ಯವಾಯಿತು.19ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.20ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು.ಪೌಲನು ಮತ್ತು ಬಾರ್ನಬನು ಅಂತಿಯೋಕ್ಯಕ್ಕೆ ಹಿಂತಿರುಗಿದ್ದು
21ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.22ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.23ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.24ತರುವಾಯ ಪಿಸಿದ್ಯ ಸೀಮೆಯನ್ನು ಹಾದು ಪಂಫುಲ್ಯ ಸೀಮೆಗೆ ಬಂದು,25ಅದಕ್ಕೆ ಸೇರಿರುವ ಪೆರ್ಗೆ ಊರಿನಲ್ಲಿ ಕರ್ತನ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯ ಪಟ್ಟಣಕ್ಕೆ ಇಳಿದು ಅಲ್ಲಿಂದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಅಂತಿಯೋಕ್ಯವನ್ನು ತಲುಪಿದರು.26ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ.27ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.28ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಹೆಚ್ಚುಕಾಲ ತಂಗಿದ್ದರು.
15ಯೇರುಸಲೇಮ್ ಸಭೆಹಿರಿಯರ ಆಲೋಚನಾಸಭೆ
1ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; <<ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು>> ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.2ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.3ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಪೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.4ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.5ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; <<ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು>> ಎಂದು ಹೇಳಿದರು.6ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ;7<<ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.8ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.9ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಬೇಧಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.10ಹೀಗಿರುವುದರಿಂದ ನಮ್ಮ ಪಿತೃಗಳಾಗಲಿ, ನಾವಾಗಲಿ ಹೊರಲಾಗದ ಭಾರವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?11ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು>> ಎಂದು ಹೇಳಿದನು.12ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.13ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ;14<<ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.15ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗಂದರೆ;
16<< <ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು.ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ
ಸುಭದ್ರವಾಗಿ ನಿಲ್ಲಿಸುವೆನು.
17ಮನುಷ್ಯರಲ್ಲಿ ಉಳಿದ ಜನರುಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ
ಕರ್ತನನ್ನು ಹುಡುಕುವರು ಎಂದು
18ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ> ಎಂದು ಬರೆದದೆ. 19<<ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.20ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತಿರ್ಮಾನಿಸಿದರು.21ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ>> ಎಂದು ಹೇಳಿದನು.22ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,23ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; <<ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;24<<ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,25ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,26ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿ ಕೊಡುವುದು ಯುಕ್ತವೆಂದು ನಾವೆಲ್ಲರೂ ಒಮ್ಮನಸ್ಸಿನಿಂದ ತೀರ್ಮಾನಿಸಿದೆವು.27ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.28ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.29ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.>>30ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.31ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.32ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.33ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.34(ಆದರೆ ಸೀಲನಿಗೆ ಅಲ್ಲೇ ಇರುವುದು ಒಳ್ಳೆಯದೆಂದು ತೋಚಿತು.)35ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.ಸುವಾರ್ತೆಯನ್ನು ಸಾರುವುದಕ್ಕೆ ಪೌಲನು ಮಾಡಿದ ಎರಡನೆಯ ಪ್ರಯಾಣ (15:36, 18:22)
36ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; <<ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ>> ಎಂದು ಹೇಳಿದನು.37ಅದಕ್ಕೆ ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು38ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.39ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.40ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ41ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು. 16ಪೌಲನು ತಿಮೊಥೆಯನನ್ನು ಆರಿಸಿಕೊಂಡದ್ದು
1ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.2ಅವನು ಲುಸ್ತ್ರದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು.3ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.4ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.5ಸಭೆಗಳು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು.ಪೌಲನಿಗೆ ಬಂದ ಮಕೆದೋನ್ಯದ ಕರೆ
6ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,7ಮೂಸ್ಯಕ್ಕೆ ಹತ್ತಿರವಾಗಿ ಬಂದಾಗ, ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.8ಆಗ ಅವರು ಮೂಸ್ಯದ ಮುಖಾಂತಾರವಾಗಿ ತ್ರೋವಕ್ಕೆ ಬಂದರು.9ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; <<ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು>> ಅವನನ್ನು ಬೇಡಿಕೊಳ್ಳುತ್ತಿದ್ದನು.10ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.11ನಾವು ತ್ರೋವದಿಂದ ಸಮುದ್ರ ಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಯನ್ನು ತಲುಪಿದೆವು.ಫಿಲಿಪ್ಪಿಯಲ್ಲಿ ಲುದ್ಯಳ ಮನಃಪರಿವರ್ತನೆ
12ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.13ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.14ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.15ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; <<ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು>> ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.ಪೌಲ ಮತ್ತು ಸೀಲರನ್ನು ಸೆರೆಯಲ್ಲಿ ಹಾಕಲ್ಪಟ್ಟದ್ದು
16ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ಸ್ತ್ರೀಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.17ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; <<ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ>> ಎಂದು ಕೂಗಿ ಹೇಳುತ್ತಿದ್ದಳು.18ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; <<ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ>> ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.19ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.20ಅವರನ್ನು ಅಧಿಕಾರಿಗಳ ಮುಂದೆ ತಂದು; <<ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;21ಇವರು ಯೆಹೂದ್ಯರಾಗಿದ್ದು ರೋಮನ್ನರಾದ ನಾವು ಅವಲಂಬಿಸಿ ಆಚರಿಸಬಾರದ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ>> ಅಂದರು.22ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು.23ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.24ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.ಭೂಕಂಪ ಉಂಟಾಗಿ ಅವರು ಬಿಡಿಸಲ್ಪಟ್ಟದ್ದು
25ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.26ಅಕಸ್ಮಾತವಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.27ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.28ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; <<ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ>> ಎಂದು ಹೇಳಿದನು.29ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡಬಿದ್ದನು.30ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; <<ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?>> ಕೇಳಲು,31ಅವರು; <<ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು>> ಎಂದು ಹೇಳಿ,32ಅವನಿಗೂ, ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು.33ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.34ತರುವಾಯ ಅವರನ್ನು ತನ್ನ ಮನೆಗೆ ಕರದುಕೊಂಡುಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.35ಬೆಳಗಾದ ಮೇಲೆ ಅಧಿಕಾರಿಗಳು; <<ಆ ಮನುಷ್ಯರನ್ನು ಬಿಟ್ಟುಬಿಡು>> ಎಂದು ಸಿಪಾಯಿಗಳ ಮೂಲಕ ಹೇಳಿ ಕಳುಹಿಸಿದರು.36ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; <<ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ>> ಎಂದು ಹೇಳಿದನು.37ಅದಕ್ಕೆ ಪೌಲನು; <<ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ>> ಎಂದು ಹೇಳಿದನು.38ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು.39ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.40ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.
17ಥೆಸಲೋನೀಕ ಪಟ್ಟಣದಲ್ಲಿ ಪೌಲನ ಸೇವೆ
1ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನೀಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.2ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,3ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ <<ನಾನು ನಿಮಗೆ ಪ್ರಸಿದ್ದಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ>> ಸ್ಥಿರಪಡಿಸಿದನು.4ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.5ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.6ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; <<ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.7ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ>> ಎಂದು ಕೂಗಿದರು.8ಪಟ್ಟಣದವರು ಮತ್ತು ಪಟ್ಟಣದ ಅಧಿಕಾರಿಗಳು ಈ ಮಾತುಗಳನ್ನು ಕೇಳಿ ಕಳವಳಪಟ್ಟು9ಯಾಸೋನ ಮೊದಲಾದವರಿಂದ ಜಾಮೀನು ತೆಗೆದುಕೊಂಡು ತರುವಾಯ ಅವರನ್ನು ಬಿಟ್ಟುಬಿಟ್ಟರು.ಬೆರೋಯ ಪಟ್ಟಣದಲ್ಲಿ ಪೌಲನ ಸೇವೆ
10ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.11ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.12ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.13ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೊನೀಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.14ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.15ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.ಅಥೇನೆ ಪಟ್ಟಣದಲ್ಲಿ ಪೌಲನ ಸೇವೆ
16ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.17ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು.18ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; <<ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?>> ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; <<ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು>> ಬೇರೆ ಕೆಲವರು ಹೇಳಿದರು.19ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; <<ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ?20ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ>> ಅಂದರು.21ಅಥೇನರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ.22ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; <<ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.23ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.24<<ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;25ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.26ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,27ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ.28ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, <ನಾವು ಆತನ ಸಂತಾನದವರೇ> ಎಂದು ಹೇಳಿದ್ದಾರೆ.29<<ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.30ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.31ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ>> ಅಂದನು.32ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; <<ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ>> ಅಂದರು.33ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.34ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು.
18ಕೊರಿಂಥದಲ್ಲಿ ಪೌಲನ ಸೇವೆ
1ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.2ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗ ಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.3ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.4ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.5ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.6ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; <<ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ>> ಎಂದು ಹೇಳಿ,7ಆ ಸ್ಥಳವನ್ನು ಬಿಟ್ಟು ದೇವರಿಗೆ ಭಯಪಡುವವನಾಗಿದ್ದ ತೀತ ಯುಸ್ತನೆಂಬುವನ ಮನೆಗೆ ಹೋದನು. ಅವನ ಮನೆಯು ಸಭಾಮಂದಿರದ ಬದಿಯಲ್ಲಿ ಇತ್ತು.8ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.9ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; <<ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,10ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ>> ಎಂದು ಹೇಳಿದನು.11ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಆ ಜನರಿಗೆ ದೇವರ ವಾಕ್ಯವನ್ನು ಉಪದೇಶಮಾಡುತ್ತಿದ್ದನು.12ಗಲ್ಲಿಯೋನನು ಅಖಾಯ ಪ್ರಾತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;13<<ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಆರಾಧಿಸುವುದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು>> ದೂರುಹೇಳಿದರು.14ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; <<ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.15ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ>> ಎಂದು ಹೇಳಿ,16ಅವರನ್ನು ನ್ಯಾಯಾಸ್ಥಾನದ ಸ್ಥಳದಿಂದ ಹೊರಡಿಸಿಬಿಟ್ಟನು.17ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.18ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.19ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.20ಅವರು ಅವನನ್ನು ಇನ್ನು ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ,21<<ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು>> ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,22ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು.ಸುವಾರ್ತೆಯನ್ನು ಸಾರುವುದಕ್ಕೆ ಪೌಲನು ಮಾಡಿದ ಮೂರನೆಯ ಪ್ರಯಾಣ [18:23, 21:17]
23ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.24ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನೂ ಧರ್ಮಶಾಸ್ತ್ರಗಳಲ್ಲಿ ಪ್ರವೀಣನೂ ಆಗಿದ್ದನು.25ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.26ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.27ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.28ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು.
19ಎಫೆಸ ಪಟ್ಟಣದಲ್ಲಿ ಪೌಲನ ಸೇವೆ
1ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;2<<ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?>> ಎಂದು ಅವರನ್ನು ಕೇಳಲು ಅವರು ಅವನಿಗೆ; <<ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ>> ಅಂದರು.3ಅವನು; <<ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ>> ಎಂದು ಕೇಳಿದ್ದಕ್ಕೆ ಅವರು; <<ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು>> ಅಂದರು.4ಅದಕ್ಕೆ ಪೌಲನು; <<ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು>> ಎಂದು ಹೇಳಲು,5ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.6ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.7ಅಲ್ಲಿ ಸುಮಾರು ಹನ್ನೆರಡು ಮಂದಿ ಗಂಡಸರಿದ್ದರು.8ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.9ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.10ಇದು ಎರಡು ವರುಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.11ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದುದರಿಂದ,12ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.13ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; <<ಪೌಲನು ಸಾರುವ ಯೇಸುವಿನ ಆಣೆ>> ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.14ಮುಖ್ಯಯಾಜಕ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಮಕ್ಕಳೂ ಹಾಗೆ ಮಾಡುತ್ತಿದ್ದರು.15ಆದರೆ ದುರಾತ್ಮವು ಅವರಿಗೆ; <<ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?>> ಎಂದು ಹೇಳಿತು;16ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.17ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.18ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.19ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟ-ಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು.20ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.21ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; <<ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು>> ಹೇಳಿದನು.22ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.ಎಫೆಸ ಪಟ್ಟಣದಲ್ಲಿ ದಂಗೆ
23ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.24ಹೇಗಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.25ಅವನು ಅವರನ್ನೂ ಮತ್ತು ಆ ಕಸುಬಿಗೆ ಸಂಬಂಧಪಟ್ಟ ಕೆಲಸದವರನ್ನೂ ಒಟ್ಟಿಗೆ ಕರೆಸಿ ಅವರಿಗೆ; <<ಜನರೇ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲಿರಿ.26ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.27ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು>> ಹೇಳಿದನು.28ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; <<ಎಫೆಸದವರ ಅರ್ತೆಮೀದೇವಿ ಮಹಾದೇವಿ>> ಎಂದು ಅರ್ಭಟಿಸಿದರು.29ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯೋಸನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.30ಪೌಲನು ಜನರೊಳಗೆ ನುಗ್ಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.31ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು.32ಜನಸಮೂಹದಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಕೂಗಾಡಿದರೆ ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗುತ್ತಿದ್ದರು. ಬಹುಜನರಿಗೆ ತಾವು ಅಲ್ಲಿ ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ.33ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.34ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; <<ಎಫೆಸದವರ ಅರ್ತೆಮೀದೇವಿ ಮಹಾದೇವಿ>> ಎಂದು ಎರಡು ಘಂಟೆ ಹೊತ್ತು ಕೂಗಿದರು.35ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; <<ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ, ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ?36ಈ ಸಂಗತಿ ಅಲ್ಲವೆನ್ನುವುದಕ್ಕೆ ಯಾರಿಂದಲೂ ಆಗದಿರುವುದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿ ಏನೂ ಮಾಡಬಾರದು.37ನೀವು ಹಿಡಿದುತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.38ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಅಕ್ಕಸಾಲಿಗರಿಗೂ ಯಾವನ ಮೇಲಾದರೂ ದೂರುಗಳಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.39ಏನಾದರೂ ಹೆಚ್ಚು ವಿಚಾರಣೆ ಬೇಕಾದರೆ ಅದು ನ್ಯಾಯವಾಗಿ ನೆರೆದ ಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.40ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ>> ಎಂದು ಹೇಳಿದನು.41ಈ ಮಾತುಗಳನ್ನು ಹೇಳಿ ಜನರ ಗುಂಪನ್ನು ಕಳುಹಿಸಿಬಿಟ್ಟನು.
20ಮಕೆದೋನ್ಯ ಹಾಗು ಗ್ರೀಸ್ ದೇಶದಲ್ಲಿ ಪೌಲನ ಸೇವೆ
1ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.2ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.3ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.4ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೊನೀಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯೋಸನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.5ಅವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾಯುತ್ತಿದ್ದರು6ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.7ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.8ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.9ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.10ಆದರೆ ಪೌಲನು ಇಳಿದು ಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು; <<ಗೋಳಾಡಬೇಡಿರಿ, ಅವನು ಜೀವಂತವಾಗಿದ್ದಾನೆ>> ಎಂದು ಹೇಳಿದನು.11ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.12ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಸಮಾಧಾನವಾಯಿತು.ಪೌಲನು ಮಿಲೇತ ದ್ವೀಪಕ್ಕೆ ಹೋದದ್ದು
13ನಾವು ಮೊದಲೇ ಅಲ್ಲಿಗೆ ಹೋಗಿ ಅಸ್ಸೊಸಿನಲ್ಲಿ ಪೌಲನನ್ನು ತಮ್ಮೊಂದಿಗೆ ಹತ್ತಿಸಿಕೊಳ್ಳಬೇಕೆಂದು ಸಮುದ್ರ ಪ್ರಯಾಣಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆ ಮಾಡಿ ತಾನು ಕಾಲುನಡಿಗೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದ್ದನು.14ಅಸ್ಸೊಸಿನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹಡಗಿನಲ್ಲಿ ಸೇರಿಸಿಕೊಂಡು ಮಿತಿಲೇನ ಪಟ್ಟಣಕ್ಕೆ ಹೊರಟೆವು.15ಅಲ್ಲಿಂದ ಹೊರಟು ಮರುದಿನ ಖೀಯೊಸ್ ದ್ವೀಪಕ್ಕೆ ಎದುರಾಗಿ ಬಂದು ಅದರ ಮರುದಿನ ಸಾಮೊಸಿನ ಹತ್ತಿರ ಬಂದೆವು. ಮರುದಿನ ಮಿಲೇತಕ್ಕೆ ಸೇರಿದೆವು.16ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.ಪೌಲನು ಎಫೆಸ ಸಭೆಯ ಹಿರಿಯರಿಗೆ ಹೇಳಿದ ಕೊನೆಯ ಮಾತು
17ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.18ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; <<ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.19ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ21ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.22ಇಗೋ, ನಾನು ಈಗ ಪವಿತ್ರಾತ್ಮನಿಂದ ಬಂಧಿಸಲ್ಪಟ್ಟವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು.23ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.24ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.25ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.26ಆದಕಾರಣ ನಾನು ಈ ಹೊತ್ತು ಖಂಡಿತವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ತಪ್ಪಿನಿಂದಲ್ಲ.27ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.28ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನೇ ಆ ಗುಂಪಿನಲ್ಲಿ ಸಭಾಧ್ಯಕ್ಷರಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.29ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.30ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.31ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.32ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.33ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.34ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ, ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲಿರಿ.35ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; <ಪಡೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ> ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು>> ಅಂದನು.36ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು.37ಬಳಿಕ ಪೌಲನು; <<ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ>> ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.38ತರುವಾಯ ಅವರು ಹಡಗಿನವರೆಗೆ ಅವನ ಸಂಗಡ ಹೋಗಿ ಅವನನ್ನು ಬೀಳ್ಕೊಟ್ಟರು.
21ಪೌಲನು ಯೆರೂಸಲೇಮಿಗೆ ಮಾಡಿದ ಪ್ರಯಾಣ
1ನಾವು ಅವರನ್ನು ಬಿಟ್ಟು ಹಡಗನ್ನು ಹತ್ತಿದ ಮೇಲೆ ನೇರವಾಗಿ ಕೋಸ್ ದ್ವೀಪಕ್ಕೆ ಬಂದು ಸೇರಿದೆವು. ಮರುದಿನ ರೋದ ದ್ವೀಪಕ್ಕೆ ಹೋಗಿ ಅಲ್ಲಿಂದ ಪತರ ಪಟ್ಟಣಕ್ಕೆ ಬಂದೆವು.2ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು, ಅದರಲ್ಲಿ ಪ್ರಯಾಣವನ್ನು ಮುಂದುವರೆಸಿದೆವು.3ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.4ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.5ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ತಮ್ಮ ಮಡದಿ ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆ ಮಾಡಿ,6ಒಬ್ಬರಿಗೊಬ್ಬರು ವಂದನೆಮಾಡಿ ಹಡಗನ್ನು ಹತ್ತಿದೆವು; ಅವರು ಹಿಂತಿರುಗಿ ತಮ್ಮತಮ್ಮ ಮನೆಗಳಿಗೆ ಹೋದರು.7ನಾವು ತೂರ್ ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿನ ಇದ್ದು,8ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳುಮಂದಿಯಲ್ಲಿ ಒಬ್ಬನಾಗಿದ್ದನು.9ಅವನಿಗೆ ಕನ್ಯೆಯರಾದ ನಾಲ್ಕುಮಂದಿ ಹೆಣ್ಣು ಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.10ನಾವು ಅಲ್ಲಿ ಅನೇಕ ದಿನಗಳು ಇದ್ದ ನಂತರ, ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ನಮ್ಮ ಬಳಿಗೆ ಬಂದು, ಪೌಲನ ನಡುಕಟ್ಟನ್ನು ತೆಗೆದು,11ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; <<ಈ ನಡುಕಟ್ಟು ಯಾವನದೋ ಅವನನ್ನು <ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ> >> ಹೇಳಿದನು.12ಆ ಮಾತನ್ನು ಕೇಳಿದಾಗ ನಾವು, ಆ ಸ್ಥಳದವರೂ; ನೀನು ಯೆರೂಸಲೇಮಿಗೆ ಹೋಗಲೇಬಾರದೆಂದು ಪೌಲನನ್ನು ಬೇಡಿಕೊಂಡೆವು.13ಅದಕ್ಕೆ ಪೌಲನು; <<ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ>> ಅಂದನು.14ಅವನು ಒಪ್ಪದೆ ಇದ್ದುದರಿಂದ; <<ಕರ್ತನ ಚಿತ್ತದಂತೆ ಆಗಲಿ>> ಎಂದು ಹೇಳಿ ನಾವು ಸುಮ್ಮನಾದೆವು.15ಆ ದಿನಗಳಾದ ಮೇಲೆ ನಾವು ಚೇತರಿಸಿಕೊಂಡು ಯೆರೂಸಲೇಮಿಗೆ ಹೊರಟೆವು.16ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.ಪೌಲನು ಯಾಕೋಬನನ್ನು ಬೇಟ್ಟಿಯಾದದ್ದು
17ನಾವು ಯೆರೂಸಲೇಮಿಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಬರಮಾಡಿಕೊಂಡರು.18ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಹಿರಿಯರೆಲ್ಲರು ಸಹ ಬಂದರು.19ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.20ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; <<ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.21ನೀನು ಅನ್ಯಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ; <ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ, ಮೋಶೆಯ ಧರ್ಮವನ್ನು ತ್ಯಜಿಸಬೇಕೆಂಬುದಾಗಿ ಬೋಧಿಸುತ್ತಿರುವೆ> ಎಂದು ನಿನ್ನ ಕುರಿತಾಗಿ ಹೇಳಿದ್ದಾರೆ.22ನೀನು ಬಂದಿರುವುದನ್ನು ಅವರು ಹೇಗೂ ತಿಳಿದುಕೊಳ್ಳುವರು. ಹೀಗಿರುವಲ್ಲಿ ನಾವು ಏನು ಮಾಡಬೇಕು?23ಅದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ಶಪಥಮಾಡಿದ ನಾಲ್ಕುಮಂದಿ ಇದ್ದಾರೆ.24ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು.25ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ಕುರಿತಾದರೋ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕತ್ತು ಹಿಸುಕಿ ಕೊಂದದ್ದನ್ನೂ ಅನೈತಿಕತೆಯನ್ನೂ ಬಿಟ್ಟು ದೂರವಾಗಿರಬೇಕೆಂಬುದಾಗಿ ನಾವು ತೀರ್ಮಾನಿಸಿದ ನಿಯಮಗಳನ್ನು ಬರೆದು ಕಳುಹಿಸಿದೆವಲ್ಲಾ>> ಎಂದು ಹೇಳಿದರು.26ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.27ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು;28<<ಇಸ್ರಾಯೇಲ್ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ>> ಎಂದು ಕೂಗಿದರು.29ಮೊದಲು ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ನೋಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು.30ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.31ಅವರು ಅವನನ್ನು ಕೊಲ್ಲುವುದಕ್ಕೆ ಯತ್ನಿಸುತ್ತಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲಮಿನ ಸಹಸ್ರಾಧಿಪತಿಗೆ ವರದಿ ಬಂದಿತು.32ಅವನು ತಕ್ಷಣವೇ ಸಿಪಾಯಿಗಳನ್ನೂ, ಶತಾಧಿಪತಿಗಳನ್ನೂ ತೆಗೆದುಕೊಂಡು ಜನಸಮೂಹದ ಹತ್ತಿರ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ, ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವುದನ್ನು ಬಿಟ್ಟರು.33ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;34ಇವನಾರು? ಏನು ಮಾಡಿದ್ದಾನೆ? ಎಂದು ಕೇಳಲು ಕೆಲವರು ಹೀಗೆ, ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿಮಿತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು.35ಪೌಲನು ಮೆಟ್ಟಿಲುಗಳ ಮೇಲೆ ಬಂದಾಗ ಜನರ ನೂಕಾಟದ ನಿಮಿತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.36ಏಕೆಂದರೆ, ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು; <<ಅವನನ್ನು ಕೊಲ್ಲಿರಿ>> ಎಂದು ಕೂಗುತ್ತಾ ಬೆನ್ನಟ್ಟಿ ಬರುತ್ತಿದ್ದರು.37ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವುದರೊಳಗಾಗಿ ಅವನು ಆ ಸಹಸ್ರಾಧಿಪತಿಗೆ, <<ನಿನಗೆ ಒಂದು ಮಾತು ಹೇಳುವುದಕ್ಕೆ ನನಗೆ ಅಪ್ಪಣೆ ಇದೆಯೋ>>? ಎಂದು ಕೇಳಲು ಅವನು; <<ಗ್ರೀಕ್ ಭಾಷೆ ನಿನಗೆ ಬರುತ್ತದೋ?38ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ>> ಎಂದು ಕೇಳಿದನು.39ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.40ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಬಿಸಿದನು.,
221<<ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ>> ಎಂದು ಹೇಳಿದನು.2ಅವನು ತಮ್ಮ ಸಂಗಡ ಇಬ್ರಿಯ ಭಾಷೆಯಲ್ಲಿ ಮಾತನಾಡುವುದನ್ನು ಕೇಳಿ ಅವರು ಮತ್ತಷ್ಟು ನಿಶ್ಶಬ್ದವಾದರು. ಆಗ ಅವನು ಹೇಳಿದ್ದೇನಂದರೆ;3<<ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.4ಈ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ, ಹೆಂಗಸರಿಗೂ ಬೇಡಿಹಾಕಿಸುತ್ತಾ, ಅವರನ್ನು ಸೆರೆಮನೆಗಳಿಗೆ ಹಾಕಿಸುತ್ತಾ ಇದ್ದೆನು, ಕೊಲೆ ಮಾಡಲಿಕ್ಕೂ ಹಿಂಜರಿಯದೆ ಹಿಂಸಿಸುತ್ತಿದ್ದೆನು.5ಈ ವಿಷಯದಲ್ಲಿ ಮಹಾಯಾಜಕನೂ, ಹಿರಿಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.6<<ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಫಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು.7ಆಗ; <ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ>? ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು.8<< <ಅದಕ್ಕೆ ನಾನು; ಕರ್ತನೇ, ನೀನಾರು?> ಎಂದು ಕೇಳಲು ಆತನು; <ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು> ಎಂದು ನನಗೆ ಹೇಳಿದನು.9ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು, ನನ್ನ ಸಂಗಡ ಮಾತನಾಡಿದಾತನ ಶಬ್ದವನ್ನು ಕೇಳಲಿಲ್ಲ.10<<ಆಗ ನಾನು; <ಕರ್ತನೇ, ನಾನೇನು ಮಾಡಬೇಕು>? ಎಂದು ಕೇಳಲು ಕರ್ತನು ನನಗೆ; <ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು> ಎಂದು ಹೇಳಿದನು.11ಆ ಬೆಳಕಿನ ಮಹಿಮೆಯಿಂದ ನನಗೆ ಕಣ್ಣುಕಾಣದೆ ಇದ್ದುದರಿಂದ ನನ್ನ ಜೊತೆಯಲ್ಲಿದ್ದವರು, ನನ್ನನ್ನು ಕೈಹಿಡಿದುಕೊಂಡು ದಮಸ್ಕದೊಳಕ್ಕೆ ಕರೆದುಕೊಂಡುಹೋದರು.12<<ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ದೈವಭಕ್ತನೂ, ಆ ಸ್ಥಳದ ಯೆಹೂದ್ಯರೆಲ್ಲರಿಂದ13ಒಳ್ಳೆಯವನೆಂದು ಹೆಸರು ಹೊಂದಿದವನೂ ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು, ನಿಂತು; <ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದಿಕೋ> ಎಂದು ಹೇಳಿದನು. ಹೇಳಿದ ತಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು.14<<ಆಗ ಅವನು; <ನಮ್ಮ ಪಿತೃಗಳ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.15ನೀನು ಕಂಡು, ಕೇಳಿದ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು.16ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ> ಅಂದನು.17<<ಅನಂತರದಲ್ಲಿ ನಾನು ಯೆರೂಸಲೇಮಿಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ, ಧ್ಯಾನಪರವಶನಾಗಿ ಅವನನ್ನು ಕಂಡೆನು.18ಆತನು; <ನೀನು ತ್ವರೆಪಟ್ಟು ಬೇಗನೆ ಯೆರೂಸಲೇಮಿನಿಂದ ಹೊರಟುಹೋಗು, ನನ್ನ ವಿಷಯದಲ್ಲಿ, ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವುದಿಲ್ಲ> ಅಂದನು.19<<ಅದಕ್ಕೆ ನಾನು; <ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ, ನಿನ್ನ ಮೇಲೆ ನಂಬಿಕೆಯಿಟ್ಟವರನ್ನು, ನಾನು ಸೆರೆಮನೆಯಲ್ಲಿ ಹಾಕಿಸುತ್ತಾ, ಹೊಡಿಸುತ್ತಾ ಇದ್ದೆನೆಂಬುದನ್ನು,20ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ> ಎಂಬುದು ಅವರೇ ಬಲ್ಲವರಾಗಿದ್ದಾರೆ.21ಆದರೆ ಆತನು; <ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು> >> ಹೇಳಿದನು.ಪೌಲನ ರೋಮನ್ ಪೌರತ್ವ ರಕ್ಷಣೆ
22ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; <<ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು>> ಕೂಗಿ ಹೇಳಿದರು.23ಅವರು ಕೂಗುತ್ತಾ, ತಮ್ಮ ವಸ್ತ್ರಗಳನ್ನು ಹರಿದುಕೊಳ್ಳುತ್ತಾ, ಧೂಳನ್ನು ತೂರುತ್ತಾ ಇರಲಾಗಿ,24ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.25ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; <<ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?>> ಎಂದು ಕೇಳಿದನು.26ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; <<ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು>> ಎಂದು ಹೇಳಲು,27ಸಹಸ್ರಾಧಿಪತಿಯು ಪೌಲನ ಹತ್ತಿರಕ್ಕೆ ಬಂದು; <<ನೀನು ರೋಮಾಪುರದವರ ಹಕ್ಕುಳ್ಳವನೇನು? ನನಗೆ ಹೇಳು>> ಎಂದು ಅವನನ್ನು ಕೇಳಿದನು. ಅವನು, <<ಹೌದು>> ಅಂದನು.28ಅದಕ್ಕೆ ಸಹಸ್ರಾಧಿಪತಿಯು; <<ನಾನು ಬಹಳ ಹಣಕೊಟ್ಟು ಆ ಹಕ್ಕನ್ನು ಕೊಂಡುಕೊಂಡೆನು>> ಅನ್ನಲು ಪೌಲನು; <<ನಾನಾದರೋ ಹಕ್ಕುದಾರನಾಗಿ ಹುಟ್ಟಿದವನು>> ಅಂದನು.29ಅವನನ್ನು ಹೊಡೆದು ವಿಚಾರಿಸುವುದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟುಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು.ಪೌಲನು ಹಿರೀಸಭೆಯವರ ಮುಂದೆ ನಿಂತು ಮಾತನಾಡಿದ್ದು
30ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.
231ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; <<ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ>> ಅಂದನು.2ಅದಕ್ಕೆ ಮಹಾಯಾಜಕನಾದ ಅನನೀಯನು; ಅವನ ಬಾಯಿಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ;3<<ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರನುಸಾರವಾಗಿ, ನನ್ನನ್ನು ವಿಚಾರಣೆಮಾಡುವುದಕ್ಕೆ ಕುಳಿತುಕೊಂಡು ಧರ್ಮಶಾಸ್ತ್ರದ ವಿರುದ್ಧವಾಗಿ ನನ್ನನ್ನು ಹೊಡೆಯುವುದಕ್ಕೆ ಅಪ್ಪಣೆಕೊಡುತ್ತೀಯೋ?>> ಅಂದನು.4ಹತ್ತಿರ ನಿಂತಿದ್ದವರು; <<ದೇವರು ನೇಮಿಸಿದ ಮಹಾಯಾಜಕನನ್ನು ನೀನು ಬೈಯುತ್ತೀಯಾ?>> ಅನ್ನಲು,5ಪೌಲನು; <<ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ>> ಅಂದನು.6ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; <<ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ>> ಎಂದು ಕೂಗಿದನು.7ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು.8ಏಕೆಂದರೆ, ಪುನರುತ್ಥಾನವಾಗಲಿ, ದೇವದೂತನಾಗಲಿ, ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂದು ಸದ್ದುಕಾಯರು ಹೇಳುವರು. ಆದರೆ ಇವೆರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು.9ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; <<ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು>> ಎಂದು ವಾದಿಸಿದರು.10ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.11ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; <<ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು>> ಅಂದನು.ಪೌಲನನ್ನು ಕೊಲ್ಲುವ ಪ್ರಯತ್ನ
12ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.13ಹೀಗೆ ಮಾಡಿದವರು ನಲವತ್ತು ಮಂದಿಗಿಂತ ಹೆಚ್ಚಾಗಿದ್ದರು.14ಇವರು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಹೋಗಿ; <<ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವುದಿಲ್ಲವೆಂದು ಕಠಿಣ ಶಪಥವನ್ನು ಮಾಡಿಕೊಂಡಿದ್ದೇವೆ.15ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ>> ಅಂದರು.16ಅವರು ಹೊಂಚು ಹಾಕಿಕೊಂಡಿರುವುದನ್ನು, ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು.17ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; <<ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ>> ಎಂದು ಹೇಳಿದನು.18ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; <<ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ>> ಎಂದು ಹೇಳಲು,19ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; <<ನೀನು ನನಗೆ ಹೇಳಬೇಕಾದದ್ದು ಏನು?>> ಎಂದು ಕೇಳಿದನು.20ಅವನು; <<ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.21ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತಕ್ಕಿಂತ ಹೆಚ್ಚು ಮಂದಿ ಯೆಹೊದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರುನೋಡುತ್ತಾ ಸಿದ್ಧವಾಗಿದ್ದಾರೆ>> ಅಂದನು.22ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; <<ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ>> ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.ಕೈಸರೈಯಕ್ಕೆ ಪೌಲನನ್ನು ಕಳುಹಿಸಿದ್ದು
23ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; <<ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.>>24ಮತ್ತು ಕುದುರೆಗಳನ್ನು ಸಿದ್ಧಮಾಡಿ, ಪೌಲನನ್ನು ಹತ್ತಿಸಿ, ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟನು.25ಇದಲ್ಲದೆ ಈ ಕೆಳಗಣ ಅಭಿಪ್ರಾಯದ ಒಂದು ಪತ್ರವನ್ನು ಬರೆದನು, ಅದೇನಂದರೆ;26<<ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.27ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.28ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ, ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು.29ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.30ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು>> ಎಂಬುದೇ.31ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ, ರಾತ್ರಿಕಾಲದಲ್ಲಿ ಪೌಲನನ್ನು ಅಂತಿಪತ್ರಿ ಊರಿಗೆ ಕರೆದುಕೊಂಡು ಹೋದರು.32ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ, ತಾವು ಕೋಟೆಗೆ ಹಿಂತಿರುಗಿ ಬಂದರು.33ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.34ದೇಶಾಧಿಪತಿಯು ಆ ಕಾಗದವನ್ನು ಓದಿ, ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು;35<<ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ>> ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.
24ಫೇಲಿಕ್ಸನ ಮುಂದೆ ನಡೆದ ನ್ಯಾಯವಿಚಾರಣೆ
1ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.2ಪೌಲನನ್ನು ಕರೆಯಿಸಿದನಂತರ ತೆರ್ತುಲ್ಯನು ಅವನ ಮೇಲೆ ತಪ್ಪುಹೊರಿಸುವುದಕ್ಕೆ ಪ್ರಾರಂಭಿಸಿ ಹೀಗಂದನು; <<ಮಹಾ ಶ್ರೇಷ್ಠನಾದ ಫೇಲಿಕ್ಸನೇ, ನಿನ್ನ ಮೂಲಕವಾಗಿ ನಮಗೆ ಬಹು ಸಮಾಧಾನ ಉಂಟಾಗುವುದರಿಂದಲೂ, ನಿನ್ನ ಮುಂದಾಲೋಚನೆಯಿಂದ ಈ ದೇಶದ ಜನರಿಗೆ ಎಲ್ಲಾ ವಿಧದಲ್ಲಿಯೂ, ಎಲ್ಲಾ ಸ್ಥಳಗಳಲ್ಲಿಯೂ, ಸುಧಾರಣೆಗಳು ಆಗುವುದರಿಂದಲೂ3ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ.4ಆದರೆ ನಿನ್ನನ್ನು ಹೆಚ್ಚಾಗಿ ಬೇಸರಗೊಳಿಸುವುದಕ್ಕೆ ಮನಸ್ಸಿಲ್ಲದೆ ನಾವು ಸಂಕ್ಷಿಪ್ತವಾಗಿ ಹೇಳುವ ಮಾತುಗಳನ್ನು ದಯೆಯಿಂದ ಕೇಳಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತೇನೆ.5<<ಈ ಮನುಷ್ಯನನು <ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.>6ಇದಲ್ಲದೆ ಇವನು, ದೇವಾಲಯವನ್ನು ಹೊಲೆಮಾಡುವುದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು.7(ಆದರೆ ಸಹಸ್ರಾಧಿಪತಿಯಾದ ಲೂಸ್ಯನು ಮಧ್ಯೆ ಬಂದು ಬಲವಂತಮಾಡಿ, ಅವನನ್ನು ನಮ್ಮ ಕೈಯಿಂದ ಬಿಡಿಸಿಕೊಂಡು ಹೋದನು.)8ಇವನನ್ನು ನೀನೇ ವಿಚಾರಿಸಿದರೆ, ನಾವು ಇವನ ಮೇಲೆ ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ, ಸುಳ್ಳೋ ಎಂದು ಇವನಿಂದಲೇ ತಿಳಿದುಕೊಳ್ಳಬಹುದು>> ಎಂದು ಹೇಳಿದನು.9ಆಗ ಯೆಹೂದ್ಯರು ಈ ಸಂಗತಿಗಳು ನಿಜವಾಗಿವೆ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವವರೊಂದಿಗೆ ಸೇರಿಕೊಂಡರು.10ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; <<ನೀನು ಅನೇಕ ವರುಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.11ನಾನು ದೇವಾರಾಧನೆಮಾಡುವುದಕ್ಕೆ, ಯೆರೂಸಲೇಮಿಗೆ ಹೋಗಿ, ಹನ್ನೆರಡು ದಿನಗಳು ಮಾತ್ರವಾಗಿದೆಯೆಂದು ನೀನು ತಿಳಿದುಕೊಳ್ಳಬಹುದು.12ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ.13ಇದಲ್ಲದೆ ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.14ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.15ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.16ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.17<<ಕೆಲವು ವರುಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.18ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.19ನನ್ನ ವಿರುದ್ಧ ಅವರಿಗೆ ಏನಾದರೂ ಇದ್ದರೆ, ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು.20ಇಲ್ಲವಾದ್ದರಿಂದ ನಾನು ಹಿರಿಸಭೆಯ ಎದುರಿನಲ್ಲಿ ನಿಂತಿದ್ದಾಗ, ನನ್ನಲ್ಲಿ ತಪ್ಪುಗಳೇನಾದರೂ ಕಂಡಿದ್ದರೆ ಇವರೇ ಹೇಳಲಿ.21ನಾನು ಇವರ ನಡುವೆ ನಿಂತು; <ಪುನರುತ್ಥಾನದ ವಿಷಯದಲ್ಲಿ, ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ> ಎಂದು ಕೂಗಿ ಹೇಳಿದರ ಬಗ್ಗೆ ಹೇಳಬಹುದೇ ಹೊರತು ಬೇರೆ ಏನನ್ನೂ ಹೇಳಲಾರರು>> ಅಂದನು.22ಫೇಲಿಕ್ಸನು ಈ ಮಾರ್ಗವನ್ನು, ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ; <<ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು>> ಹೇಳಿ, ವಿಚಾರಣೆಯನ್ನು ತಡೆಮಾಡಿದನು.23ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.ಪೌಲನು ಎರಡು ವರುಷ ಕಾವಲಿನಲ್ಲಿದ್ದದ್ದು
24ಕೆಲವು ದಿನಗಳಾದ ಮೇಲೆ ಫೇಲಿಕ್ಸನು, ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು, ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು.25ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; <<ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು>> ಎಂದು ಹೇಳಿದನು.26ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರೂ ಹಣಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ, ಅವನೊಂದಿಗೆ ಸಲ್ಲಾಪಮಾಡುತ್ತಿದ್ದನು.27ಎರಡು ವರುಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.
25ಪೌಲನು ಫೆಸ್ತನ ಮುಂದೆ ವಿಚಾರಣೆಗೆ
1ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.2ಅಲ್ಲಿ ಮುಖ್ಯಯಾಜಕನೂ, ಯೆಹೂದ್ಯರಲ್ಲಿ ಪ್ರಮುಖರೂ, ಅವನಿಗೆ ಪೌಲನ ಮೇಲೆ ದೂರು ಹೇಳಿ,3ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.4ಫೆಸ್ತನು ಅವರಿಗೆ; ಪೌಲನು ಕೈಸರೈಯದಲ್ಲಿ ಸೆರೆಮನೆಯೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟು ಹೋಗಬೇಕೆಂದಿದ್ದೇನೆ.5ಆದಕಾರಣ ನಿಮ್ಮಲ್ಲಿ ಪ್ರಮುಖರು, ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅಪವಾದ ಏನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂದು ಹೇಳಿದನು.6ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು.7ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,8ಪೌಲನು; <<ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು>> ಪ್ರತ್ಯುತ್ತರ ಹೇಳಿದನು.9ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; <<ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?>> ಎಂದು ಕೇಳಲು, ಪೌಲನು;10<<ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.11ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ>> ಎಂದನು.12ಅಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; <<ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು>> ಎಂದು ಹೇಳಿದನು.ಫೆಸ್ತನು ಅಗ್ರಿಪ್ಪರಾಜನ ಸಲಹೆ ಪಡೆದದ್ದು
13ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.14ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ; <<ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.15ನಾನು ಯೆರೂಸಲೇಮಿನಲ್ಲಿದ್ದಾಗ, ಯೆಹೂದ್ಯರ ಮುಖ್ಯಯಾಜಕರೂ, ಹಿರಿಯರೂ ಅವನ ವಿಷಯವಾಗಿ ನನಗೆ ದೂರುಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು.16<<ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು>> ಹೇಳಿದೆನು.17ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು.18ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ,19ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.20ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ.21ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.22ಅದಕ್ಕೆ ಅಗ್ರಿಪ್ಪನು; <<ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ>> ಎಂದು ಹೇಳಲು, ಫೆಸ್ತನು; <<ನಾಳೆ ಕೇಳಬಹುದು>> ಎಂದನು.ಅಗ್ರಿಪ್ಪನ ಮುಂದೆ ಪೌಲನು
23ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.24ಆಗ ಫೆಸ್ತನು; <<ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ, ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇಮಿನಲ್ಲಿಯೂ, ಇಲ್ಲಿಯೂ ನನ್ನನ್ನು ಬೇಡಿಕೊಂಡರು.25ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.26ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.27ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ>> ಅಂದನು.
261ಆಗ ಅಗ್ರಿಪ್ಪನು, ಪೌಲನಿಗೆ; <<ನೀನು ನಿನ್ನ ಪರವಾಗಿ ಮಾತನಾಡಬಹುದು>> ಅನ್ನಲು, ಪೌಲನು ಕೈಯೆತ್ತಿ, ಪ್ರತಿವಾದ ಮಾಡಿದ್ದೇನಂದರೆ;2<<ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ಆರೋಪಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವುದರಿಂದ, ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.3ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.4<<ನಾನು ಚಿಕ್ಕಂದಿನಿಂದಲೂ, ಯೆರೂಸಲೇಮಿನಲ್ಲಿ ನನ್ನ ದೇಶದ ಜನರೊಳಗಿದ್ದು, ಬದುಕಿದ ರೀತಿಯು ಎಲ್ಲಾ ಯೆಹೂದ್ಯರಿಗೆ ತಿಳಿದ ವಿಷಯವಾಗಿದೆ.5ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.6ಈಗಲೂ ದೇವರು ನಮ್ಮ ಪಿತೃಗಳಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.7ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.8ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ?9ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.10ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.11ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.12ಈ ಉದ್ದೇಶದಿಂದ ನಾನು ಮುಖ್ಯಯಾಜಕರಿಂದ ಅಧಿಕಾರವನ್ನೂ, ಆದೇಶವನ್ನೂ ಹೊಂದಿ ದಮಸ್ಕಕ್ಕೆ ಹೋಗುವ ದಾರಿಯಲ್ಲಿ ರಾಜನೇ,13ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.14ನಾವೆಲ್ಲರು ನೆಲಕ್ಕೆ ಬೀಳಲು; <ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು> ಕೇಳಿದೆನು.15ಆಗ ನಾನು; <ಕರ್ತನೇ, ನೀನಾರು?> ಅನ್ನಲು ಕರ್ತನು; <ನೀನು ಹಿಂಸೆಪಡಿಸುವ ಯೇಸುವೇ ನಾನು.16ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಿಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು.17ನಾನು ನಿನ್ನ ಸ್ವಂತ ಜನರಿಂದಲೂ, ಅನ್ಯಜನರಿಂದಲೂ ನಿನ್ನನ್ನು ರಕ್ಷಿಸುವೆನು.18ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ> ಅಂದನು.19ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ,20ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.21ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವುದಕ್ಕೆ ಪ್ರಯತ್ನಿಸಿದರು.22ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.23ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು>> ಎಂಬುದೇ.24ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; <<ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,>> ಎಂದು ಹೇಳಿದನು.25ಅದಕ್ಕೆ ಪೌಲನು; <<ಮಹಾ ಶ್ರೇಷ್ಠನಾದ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನೇ ಹೇಳುತ್ತಿದ್ದೇನೆ.26ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಅದ್ದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.27ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ?>> ಉಂಟೆಂದು ನಾನು ಬಲ್ಲೆನು ಅಂದನು.28ಅದಕ್ಕೆ ಅಗ್ರಿಪ್ಪನು; <<ಅಲ್ಪಪ್ರಯತ್ನದಿಂದ, ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?>> ಎಂದು ಹೇಳಲು29ಪೌಲನು; <<ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ>> ಅಂದನು.30ಆ ಮೇಲೆ ರಾಜನೂ, ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ, ಎದ್ದು ಹೊರಗೆ ಹೋಗಿ;31<<ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ>> ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.32ಅಗ್ರಿಪ್ಪನು ಫೆಸ್ತನಿಗೆ; <<ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು>> ಎಂದು ಹೇಳಿದನು.
27ಪೌಲನು ರೋಮಾಪುರಕ್ಕೆ ಪ್ರಯಾಣ ಮಾಡಿದ್ದು
1ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.2ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನೀಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.3ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.4ಅಲ್ಲಿಂದ ಹೊರಟು ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದ್ದುದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ,5ಕಿಲಿಕ್ಯಕ್ಕೂ, ಪಂಫುಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು.6ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರೊಳಗೆ ಹತ್ತಿಸಿದನು.7ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಸ್ನೀಡಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದುದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು,8ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು.9ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು;10<<ಜನರೇ, ಈ ಪ್ರಯಾಣದಿಂದ ಸರಕಿಗೂ, ಹಡಗಿಗೆ ಮಾತ್ರವಲ್ಲದೆ, ನಮ್ಮ ಪ್ರಾಣಗಳಿಗೂ ಕಷ್ಟವೂ, ಬಹು ನಷ್ಟವೂ ಸಂಭವಿಸುವುದೆಂದು ನನಗೆ ತೋರುತ್ತಿದೆ>> ಎಂದು ಅವರನ್ನು ಎಚ್ಚರಿಸಿದನು.11ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.12ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.ಚಂಡಮಾರುತಕ್ಕೆ ಸಿಕ್ಕಿಕೊಂಡ ಹಡಗು
13ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.14ಸ್ವಲ್ಪ ಹೊತ್ತಿನಮೇಲೆ ಆ ದ್ವೀಪದ ಮೇಲೆ ಈಶಾನ್ಯ ಮಾರುತ ಎಂಬ ಉರಕಲೋನ್ ಗಾಳಿಯು ಅಪ್ಪಳಿಸಿತು.15ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವುದಕ್ಕೆ ಆಗದೆಹೋದುದರಿಂದ ಗಾಳಿ ಬಂದ ಕಡೆಗೆ ಹಡಗನ್ನು ನೂಕಿಸಿಕೊಂಡು ಹೋದೆವು.16ಕ್ಲೌಡ ಎಂಬ ಒಂದು ಪುಟ್ಟ ದ್ವೀಪದ ಸಮೀಪಕ್ಕೆ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳುವುದು ಸಾಧ್ಯವಾಯಿತು.17ಅದನ್ನು ಮೇಲಕ್ಕೆ ಎತ್ತಿದ ನಂತರ ಹಗ್ಗಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆ ಮೇಲೆ ಸುರ್ತಿಸ್ ಎಂಬ ಮರಳುದಿಬ್ಬಕ್ಕೆ ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು.18ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.19ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.20ಅನೇಕ ದಿನಗಳತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು.21ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; <<ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.22ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವುದೇ ಹೊರತು, ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವುದಿಲ್ಲ.23ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;24<ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು> ನನ್ನ ಸಂಗಡ ಹೇಳಿದನು.25ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.26ಆದರೆ, ನಾವು ಯಾವುದೋ ಒಂದು ದ್ವೀಪದ ದಡವನ್ನು ತಾಕಬೇಕಾಗಿದೆ>> ಎಂದು ಹೇಳಿದನು.ಹಡಗು ಒಡೆದುಹೊದದ್ದು
27ಹದಿನಾಲ್ಕನೆಯ ರಾತ್ರಿಯಲ್ಲಿ ನಾವು ಆದ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶದ ಹತ್ತಿರ ಬಂದೆವೆಂದು ನೆನಸಿ,28ಅಳತೆ ಮಾಪನವನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರುಗಿ ಮಾಪನದ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು.29ಬಂಡೆಗಳಿಗೆ ಡಿಕ್ಕಿಹೊಡೆದೆವೋ ಎಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಬಿಟ್ಟು ಬೇಗ ಬೆಳಗಾಗಲಿ ಎಂದು ಪ್ರಾರ್ಥಿಸಿದೆವು.30ಆದರೆ, ನಾವಿಕರು ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ಸುಳ್ಳುಕಾರಣ ಕೊಟ್ಟು ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವುದಕ್ಕೆ ಪ್ರಯತ್ನಿಸುತ್ತಿರುವಾಗ,31ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; <<ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು>> ಹೇಳಿದನು.32ಆಗ ಸಿಪಾಯಿಗಳು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.33ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುತ್ತಾ; <<ಇಂದಿಗೆ ನೀವು ಹದಿನಾಲ್ಕು ದಿನದಿಂದ ಕಾದುಕೊಂಡು ಆಹಾರವನ್ನು ತೆಗೆದುಕೊಳ್ಳದೆ, ಹಸಿದುಕೊಂಡು ಇದ್ದೀರಿ.34ಅದುದರಿಂದ, ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು>> ಹೇಳಿ,35ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.36ಆಗ ಎಲ್ಲರೂ ಧೈರ್ಯ ತಂದುಕೊಂಡು, ತಾವೂ ಆಹಾರವನ್ನು ಸೇವಿಸಿದರು.37ಆ ಹಡಗಿನಲ್ಲಿದ್ದ ನಾವೆಲ್ಲರೂ ಒಟ್ಟು ಇನ್ನೂರ ಎಪ್ಪತ್ತಾರು ಮಂದಿ ಇದ್ದೇವು.38ಸಾಕಾದಷ್ಟು ತಿಂದ ಮೇಲೆ, ಮಿಕ್ಕ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ, ಹಡಗನ್ನು ಹಗುರ ಮಾಡಿದರು.39ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವುದಕ್ಕೆ ಸಾಧ್ಯವಾದೀತೆಂದು ಯೋಚಿಸಿದರು.40ಅವರು ಲಂಗರುಗಳನ್ನು ಸರಿಸಿ ಸಮುದ್ರದಲ್ಲೇ ಬಿಟ್ಟು, ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ, ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು.41ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.42ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬುದಾಗಿ ಯೋಚಿಸಿದರು.43ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,44ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ, ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರವನ್ನು ತಲುಪಿದರು.
28ಪೌಲನು ಮೆಲೀತೆದ್ವೀಪದಲ್ಲಿ
1ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ, ಅದು ಮೆಲೀತೆ ದ್ವೀಪವೆಂದು ತಿಳಿದುಬಂತು.2ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆಯು ಆಗಲೇ ಹೊಯ್ದು ಚಳಿಯಾಗುತ್ತಿದ್ದುದರಿಂದ, ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.3ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ, ತಂದು ಬೆಂಕಿಯ ಮೇಲೆ ಹಾಕಲು, ಆ ಶಾಖಕ್ಕೆ ಒಂದು ಸರ್ಪವು ಹೊರಗೆ ಬಂದು, ಅವನ ಕೈಯನ್ನು ಬಿಗಿಯಾಗಿ ಹಿಡಿದುಕೊಂಡಿತು.4ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; <<ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು>> ತಮ್ಮತಮ್ಮೊಳಗೆ ಮಾತನಾಡಿಕೊಂಡರು.5ಆದರೆ ಪೌಲನು ಆ ಸರ್ಪವನ್ನು ಬೆಂಕಿಯೊಳಕ್ಕೆ ಒದರಿಬಿಟ್ಟನು; ಅವನಿಗೆ ಏನೂ ಅಪಾಯ ಉಂಟಾಗಲಿಲ್ಲ.6ಅವರು; <<ಇವನ ಮೈ ಈಗ ಊದಿಕೊಳ್ಳುತ್ತದೆ, ಇಲ್ಲವೆ ಇವನು ಫಕ್ಕನೆ ಸತ್ತುಬೀಳುತ್ತಾನೆ>> ಎಂದು ಕಾದಿದ್ದರು. ಎಷ್ಟು ಹೊತ್ತು ಕಾದರು ಅವನಿಗೆ ಯಾವ ಹಾನಿಯೂ ಆಗಲಿಲ್ಲ. ಇದನ್ನು ಕಂಡ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿಕೊಂಡು <<ಇವನೊಬ್ಬ ದೇವನೇ>> ಇರಬೇಕು ಎಂದುಕೊಂಡರು.ಮೆಲೀತೆದ್ವೀಪದಲ್ಲಿ ನಡೆದ ಸೇವೆ
7ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಸಮೀಪದಲ್ಲಿ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.8ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು.9ಇದಾದ, ನಂತರ ಆ ದ್ವೀಪದಲ್ಲಿದ್ದ ಉಳಿದ ರೋಗಿಗಳು, ಪೌಲನ ಬಳಿಗೆ ಬಂದು ಸ್ವಸ್ಥರಾದರು.10ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.ಪೌಲನು ರೋಮಾಪುರಕ್ಕೆ ಬಂದದ್ದು
11ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು, ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆಯಲು ತಂಗಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ ಇತ್ತು.12ನಾವು ಸುರಕೂಸಿಗೆ ತಲುಪಿ ಅಲ್ಲಿ ಮೂರು ದಿನ ತಂಗಿದೆವು.13ಅಲ್ಲಿಂದ ಮುಂದುವರೆದು ರೇಗಿಯ ಪಟ್ಟಣಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣ ಗಾಳಿ ಬೀಸಿದ್ದರಿಂದ, ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು.14ಅಲ್ಲಿ ಕ್ರೈಸ್ತ ಸಹೋದರರನ್ನು ಕಂಡೆವು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿನ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.15ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.16ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.17ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; <<ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪಿತೃಗಳ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.18ಅವರು ನನ್ನನ್ನು ವಿಚಾರಣೆಮಾಡಿ, ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು.19ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ.20ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ>> ಎಂದು ಹೇಳಿದನು.21ಅದಕ್ಕೆ ಅವರು ಅವನಿಗೆ; <<ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ.22ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ>> ಅಂದರು.23ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.24ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು.25ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; <<ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ26ನಿಮ್ಮ ಪಿತೃಗಳಿಗೆ ವಿವರವಾಗಿ ಹೇಳಿದ್ದೇನೆಂದರೆ;<< <ನೀನು ಈ ಜನರ ಬಳಿಗೆ ಹೋಗಿ ಅವರಿಗೆ;
ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ;
ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು.
27ಏಕೆಂದರೆ, ಈ ಜನರ ಹೃದಯವು ಕಲ್ಲಾಗಿದೆ;ಇವರ ಕಿವಿ ಕಿವುಡಾಗಿದೆ;
ಇವರು ಕಣ್ಣು ಮುಚ್ಚಿಕೊಂಡಿದ್ದಾರೆ;
ತಾವು ಕಣ್ಣಿನಿಂದ ಕಂಡು,
ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು
ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಹೀಗೆ ಮಾಡಿಕೊಂಡಿದ್ದಾರೆ> ಎಂಬುದೇ.
28<<ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು>> ಎಂದು ಹೇಳಿದನು.29ಅವನು ಈ ಮಾತನ್ನು ಹೇಳಿದ ಮೇಲೆ ಅವರು ಹೊರಟುಹೋದರು.30ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರುಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು.31ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು. ಯೋಹಾನನು ಬರೆದ ಪ್ರಕಟಣೆ
1ಪೀಠಿಕೆ
1ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.2ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು.3 ಈ ಪ್ರವಾದನಾ ವಾಕ್ಯಗಳನ್ನು ಓದುವವನೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ.ಆಸ್ಯಸೀಮೆಯ ಏಳು ಸಭೆಗಳಿಗೆ ವಂದನೆಗಳು
4ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ5ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,6ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.7ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.8 <<ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ>> ಎಂದು ದೇವರಾದ ಕರ್ತನು ಹೇಳುತ್ತಾನೆ.ಕ್ರಿಸ್ತನ ದರ್ಶನ
9ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.10ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿ, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.11ಅದು, <<ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು>> ಎಂದು ನುಡಿಯಿತು.12ನನ್ನ ಸಂಗಡ ಮಾತನಾಡುತ್ತಿದ್ದ ಶಬ್ದವು ಯಾರದೆಂದು ನೋಡುವುದಕ್ಕೆ ನಾನು ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ13ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.14 ಆತನ ತಲೆಯ ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತೆಯೂ,15 ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ, ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.16 ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, <<ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,18ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.19ಆದ್ದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ.20ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ ದೂತರು, ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.>>
2ಎಫೆಸ ಸಭೆಗೆ ಸಂದೇಶ
1<<ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,2<< ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.3ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು.4ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ. ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.5ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.6ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ.7ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.ಸ್ಮುರ್ನದ ಸಭೆಗೆ ಸಂದೇಶ
8<<ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ,9ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ಚರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ.10ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.11ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.ಪೆರ್ಗಮದ ಸಭೆಗೆ ಸಂದೇಶ
12<<ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ, ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ,13ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.14ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.15ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ.16ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆ ನಾನು ಬೇಗನೆ ನಿನ್ನ ಬಳಿಗೆ ಬಂದು ನನ್ನ ಬಾಯಿಂದ ಹೊರಬರುವ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.17ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.ಥುವತೈರದ ಸಭೆಗೆ ಸಂದೇಶ
18<<ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,19 ನಿನ್ನ ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು.20ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.21ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.22ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.23 ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.24ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ.25ಆದರೆ ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ.26-28 ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಕಡೆಯವರೆಗೂ ನಡಿಸುತ್ತಾನೋ, ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು. << < ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು, ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.> ಇದಲ್ಲದೆ ಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.29 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.
3ಸಾರ್ದಿಸಿನ ಸಭೆಗೆ ಸಂದೇಶ
1ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, << ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು ಸತ್ತವನಾಗಿರುವೆ.2<<ಎಚ್ಚರವಾಗು, ಸಾಯುವ ಹಾಗಿರುವ ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ.3ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.4ಆದರೂ ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು ಯೋಗ್ಯರಾಗಿರುವುದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.5 ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.6 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.ಫಿಲದೆಲ್ಫಿಯ ಸಭೆಗೆ ಸಂದೇಶ
7<<ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,8ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.9ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.10ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.11ನಾನು ಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.12 ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನು, ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.13 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.ಲವೊದಿಕೀಯ ಸಭೆಗೆ ಸಂದೇಶ
14<<ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ದೇವರ ಸೃಷ್ಟಿಗೆ ಮೂಲನೂ ಆಗಿರುವ <ಆಮೆನ್> ಎಂಬಾತನು ಹೇಳುವುದೇನಂದರೆ,15ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು.16ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.17ನೀನು ನಿನ್ನ ವಿಷಯದಲ್ಲಿ ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.18ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.19 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.20ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.21 ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.22ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.>>
4 ಸ್ವರ್ಗೀಯ ಆರಾಧನೆ
1ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, <<ಇಲ್ಲಿಗೆ ಏರಿ ಬಾ, ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು>> ಎಂದು ಹೇಳಿತು.2ಕೂಡಲೆ ನಾನು ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು.3ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು.4ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.5ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.6ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.7ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು.8ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, <<ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು,
ಇರುವಾತನು, ಇದ್ದಾತನು, ಬರುವಾತನು>> ಎಂದು ಹೇಳುತ್ತಿದ್ದವು.
9ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,10-11ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, <<ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು>> ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.
5ಸುರುಳಿಯೂ ಕುರಿಮರಿಯೂ
1ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.2ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು <<ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?>> ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.3ಆದರೆ ಆ ಸುರುಳಿಯನ್ನು ತೆರೆಯುವುದಕ್ಕಾದರೂ ಅದರೊಳಗೆ ನೋಡುವುದಕ್ಕಾದರೂ ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾರಿಂದಲೂ ಆಗಲಿಲ್ಲ.4ಸುರುಳಿಯನ್ನು ತೆರೆಯುವುದಕ್ಕಾಗಲಿ ಅದನ್ನು ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವೆಂದು ನಾನು ಬಹಳವಾಗಿ ದುಃಖಿಸುತ್ತಿರುವಾಗ.5ಹಿರಿಯರಲ್ಲಿ ಒಬ್ಬನು ನನಗೆ, <<ಅಳಬೇಡ ನೋಡು, ಯೂದಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ>> ಎಂದು ಹೇಳಿದನು.6ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.7ಈತನು ಮುಂದೆ ಬಂದು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು.8ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.9ಅವರು ಹೊಸಹಾಡನ್ನು ಹಾಡುತ್ತಾ,<<ನೀನು ಸುರುಳಿಯನ್ನು ಸ್ವೀಕರಿಸಲು
ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ.
ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ
ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.
10ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ.ಅವರು ಭೂಮಿಯನ್ನು ಆಳುವರು.>>
11ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.12ಅವರು<<ವಧಿಸಲ್ಪಟ್ಟ ಕುರಿಯು
ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ,
ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು>>
ಎಂದು ಮಹಾಧ್ವನಿಯಿಂದ ಹಾಡಿದರು.
13ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ,<<ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ
ಸ್ತೋತ್ರ, ಗೌರವ, ಮಹಿಮೆ, ಆಧಿಪತ್ಯಗಳು
ಯುಗಯುಗಾಂತರಗಳಲ್ಲಿಯೂ ಇರಲಿ>>
ಎಂದು ಹೇಳುವುದನ್ನು ಕೇಳಿದೆನು.
14ಆಗ ನಾಲ್ಕು ಜೀವಿಗಳು <<ಆಮೆನ್>> ಅಂದವು ಮತ್ತು ಹಿರಿಯರು ಅಡ್ಡಬಿದ್ದು ಆರಾಧಿಸಿದರು.
6ಏಳು ಮುದ್ರೆಗಳು
1ಕುರಿಮರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತಿದ್ದ ಸ್ವರದಿಂದ <<ಬಾ!>> ಎಂದು ಹೇಳುವುದನ್ನು ಕೇಳಿದೆನು.2ನಾನು ನೋಡಲು ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲ್ಪಟ್ಟಿತು. ಅವನು ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.3ಆತನು ಎರಡನೆಯ ಮುದ್ರೆಯನ್ನು ಒಡೆದಾಗ ಎರಡನೆಯ ಜೀವಿಯು <<ಬಾ>>! ಎಂದು ಹೇಳುವುದನ್ನು ಕೇಳಿದೆನು.4ಆಗ ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು.5ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು <<ಬಾ>>! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.6ಆ ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಒಂದು <<ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ, ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ>> ಎಂದು ಹೇಳಿತು.7ಆತನು ನಾಲ್ಕನೆಯ ಮುದ್ರೆಯನ್ನು ಒಡೆದಾಗ ನಾಲ್ಕನೆಯ ಜೀವಿಯು <<ಬಾ>>! ಎನ್ನುವ ಶಬ್ದವನ್ನು ಕೇಳಿದೆನು.8ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.9ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.10ಅವರು, <<ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?>> ಎಂದು ಮಹಾಶಬ್ದದಿಂದ ಕೂಗಿದರು.11ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಬಿಳೀ ನಿಲುವಂಗಿಯು ಕೊಡಲ್ಪಟ್ಟಿತು ಇನ್ನೂ ಸ್ವಲ್ಪ ಸಮಯ ವಿಶ್ರಮಿಸಿಕೊಂಡಿರಬೇಕು. ನಿಮ್ಮ ಹಾಗೆ ವಧಿಸಲ್ಪಡಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆ ಸೇವಕರ ಸಂಖ್ಯೆ ಪೂರ್ಣವಾಗುವ ತನಕ ಕಾದಿರಬೇಕೆಂದು ಅವರಿಗೆ ಅಪ್ಪಣೆಯಾಯಿತು.12ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.13 ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು.14ಆಕಾಶವು ಸುರುಳಿಯಂತೆ ಸುತ್ತಲ್ಪಟ್ಟು ಮರೆಯಾಯಿತು. ಎಲ್ಲಾ ಬೆಟ್ಟಗಳು ಮತ್ತು ದ್ವೀಪಗಳು ತಮ್ಮತಮ್ಮ ಸ್ಥಳಗಳಿಂದ ಕದಲಿದವು.15ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.16 ಬೆಟ್ಟಗಳಿಗೂ ಬಂಡೆಗಳಿಗೂ, <<ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.17ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?>> ಎಂದು ಹೇಳಿದರು.
7ಒಂದು ಲಕ್ಷದ ನಲ್ವತ್ತನಾಲ್ಕು ಸಾವಿರ ಇಸ್ರಾಯೇಲ್ಯರಿಗೆ ಮುದ್ರೆಯೊತ್ತಿದ್ದು
1ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.2ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ,3<<ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ>> ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.4ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿ ಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ.5ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೇನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾದ್ ಕುಲದವರಲ್ಲಿ ಹನ್ನೆರಡು ಸಾವಿರ,6ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನಫ್ತಾಲಿಯ ಕುಲದವರಲ್ಲಿ ಹನ್ನೆರಡು ಸಾವಿರ, ಮನಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ,7ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ,8ಜೆಬುಲೋನನ ಕುಲದವರಲ್ಲಿ ಹನ್ನೆರಡು ಸಾವಿರ, ಯೋಸೇಫನ ಕುಲದವರಲ್ಲಿ ಹನ್ನೆರಡು ಸಾವಿರ, ಬೆನ್ಯಾಮೀನನ ಕುಲದವರಲ್ಲಿ ಮುದ್ರೆ ಹಾಕಿಸಿಕೊಂಡವರು ಹನ್ನೆರಡು ಸಾವಿರ ಮಂದಿ ಇದ್ದರು.ಸಲಕ ಜನಾಂಗಗಳ ಮಹಾ ಜನಸಮೂಹ
9ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.10ಅವರು, <<ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು>> ಎಂದು ಮಹಾಧ್ವನಿಯಿಂದ ಕೂಗಿದರು.11ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು,12 <<ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!>> ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.13ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, <<ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು>> ಎಂದು ನನ್ನನ್ನು ಕೇಳಲು, <<ಅಯ್ಯಾ ನೀನೇ ಬಲ್ಲೆ>> ಎಂದೆನು.14ಅವನು ನನಗೆ, <<ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.15ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.16ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ.17ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.>> ಎಂದು ಹೇಳಿದರು.
8ಏಳನೆಯ ಮುದ್ರೆ
1 ಆತನು ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು.2ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು.3ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.4ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು.5ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು.ಏಳು ತುತ್ತೂರಿಗಳು
6ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು.7ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.8ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು.9 ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗವು ಸತ್ತವು ಮತ್ತು ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗವು ನಾಶವಾದವು.10ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.11ಆ ನಕ್ಷತ್ರದ ಹೆಸರು ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು.12ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು.13ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, <<ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು>> ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.
91ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು.2ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಾಗಿ ಹೋದವು.3ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಇರುವ ಶಕ್ತಿಯ ಪ್ರಕಾರ ಅವುಗಳಿಗೆ ಶಕ್ತಿಯು ಕೊಡಲ್ಪಟ್ಟಿತು.4 ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.5ಅವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು. ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು.6ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು.7 ಆ ಮಿಡಿತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು.8ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು.9ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು.10ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು.11 ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.12 ಮೊದಲನೆಯ ವಿಪತ್ತು ಕಳೆದು ಹೋಯಿತು. ಇಗೋ, ಇನ್ನೂ ಎರಡು ವಿಪತ್ತುಗಳು ಅದರ ಬೆನ್ನಹಿಂದೆಯೇ ಬಂದವು.13ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಯ ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು.14ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, <<ಯೂಫ್ರಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು>> ಎಂದು ಹೇಳಿತು.15ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು.16ಕುದುರೆ ದಂಡಿನವರ ಸಂಖ್ಯೆಯು ಇಪ್ಪತ್ತುಕೋಟಿ ಎಂದು ನನಗೆ ಕೇಳಿಸಿತು.17ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು.18ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು.19ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು.20ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.21ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.
10ಬಲಿಷ್ಠನಾದ ದೂತನು ಮತ್ತು ಚಿಕ್ಕ ಸುರುಳಿಯು
1ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.2 ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು,3 ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು.4ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, <<ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು>> ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.5ಅನಂತರ ಸಮುದ್ರದ ಮೇಲೆಯೂ, ಭೂಮಿಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ,6 ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, <<ಇನ್ನು ತಡಮಾಡದೆ,7 ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು>> ಎಂದು ಹೇಳಿದನು.8ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, <<ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ>> ಎಂದು ಹೇಳಿತು.9ನಾನು ಆ ದೂತನ ಬಳಿಗೆ ಹೋಗಿ, <<ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು>> ಎಂದು ಹೇಳಿದನು.10ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು.11ಅನಂತರ ಆ ದೂತನು ನನಗೆ, <<ನೀನು ಇನ್ನೂ ಅನೇಕರನ್ನು, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು>> ಎಂದು ಆಜ್ಞಾಪಿಸಿದನು.
11ದೇವರ ಇಬ್ಬರು ಸಾಕ್ಷಿಗಳು
1ತರುವಾಯ ಅಳತೆಗೊಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು, <<ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಎಣಿಕೆಮಾಡು.2 ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.3ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.>>4ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪ ಸ್ತಂಭಗಳೂ ಇವರೇ.5ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು ಉಂಟುಮಾಡಬಯಸುವವರಿಗೆ ಆ ರೀತಿಯಾಗಿ ಹತರಾಗಬೇಕು.6 ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.7ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.8ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.9ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ.10ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.11ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು.12ಅನಂತರ ಅವರಿಗೆ, <<ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!>> ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.13ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.14 ಎರಡನೆಯ ವಿಪತ್ತು ಕಳೆದುಹೋಯಿತು. ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತಿದೆ. ಏಳನೆಯ ತುತ್ತೂರಿ15ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, <<ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು>> ಎಂಬ ಮಹಾಘೋಷಣೆಯಾಯಿತು.16ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ ಅಡ್ಡಬಿದ್ದು ,
17<<ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ
ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ.
18ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು.
ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ.
ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ,
ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ
ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ>>
ಎಂದು ಆತನನ್ನು ಆರಾಧಿಸಿದರು.
19 ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.
12ಘಟಸರ್ಪ ಮತ್ತು ಸ್ತ್ರೀ
1ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು.2 ಆಕೆಯು ಗರ್ಭಿಣಿಯಾಗಿದ್ದು ಹೆರುವುದಕ್ಕೆ ಪ್ರಸವವೇದನೆಯಿಂದ ನರಳುತ್ತಾ ಅಳುತ್ತಿದ್ದಳು.3ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು.4ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು.5ಆಕೆ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ಪಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.6ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು.7ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೆಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.8ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು.9 ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.10ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, <<ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತಾಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.11ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.12ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ>> ಎಂಬುದಾಗಿ ಹೇಳಿತು.13ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು.14ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.15ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು.16ಆದರೆ ಭೂಮಿಯು ಆ ಸ್ತ್ರೀಗೆ ಸಹಾಯಮಾಡಿತು. ಅದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತ್ತು.17ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು,18ಸಮುದ್ರ ತೀರದ ಮರಳಿನ ಮೇಲೆ ನಿಂತನು.
13ಎರಡು ಮೃಗಗಳು
1 ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.2ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ, ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.3ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು, ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು.4ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, <<ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?>> ಎಂದರು.5 ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.6ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು.7 ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.9 ಕಿವಿಯುಳ್ಳವನು ಕೇಳಲಿ,10 ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.11 ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.12ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.13ಇದು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,14ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.15ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.16ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು.17ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಸಂಖ್ಯೆ.18 ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.
14ಕುರಿಮರಿಯು ಮತ್ತು ಆತನ ಜನರು
1ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.2ಇದಲ್ಲದೆ ಪರಲೋಕದಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.3ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.4ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.5ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.ಮೂವರು ದೇವದೂತರ ಸಂದೇಶಗಳು
6ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.7ಆ ದೂತನು, <<ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ>> ಎಂದು ಮಹಾಧ್ವನಿಯಿಂದ ಹೇಳಿದನು.8ಅವನ ಹಿಂದೆ ಎರಡನೆಯ ದೇವದೂತನು ಬಂದು, <<ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು>> ಎಂದು ಹೇಳಿದನು.9ಅವನ ಹಿಂದೆ ಮೂರನೆಯ ದೇವದೂತನು ಬಂದು , <<ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,10ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.11 ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು>> ಎಂದು ಮಹಾಶಬ್ದದಿಂದ ಹೇಳಿದನು.12 ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.13ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, <<ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ>> ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, <<ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ>> ಎಂದು ಹೇಳುತ್ತಾನೆ.ಭೂಲೋಕದ ಸುಗ್ಗಿಕಾಲವನ್ನು ಕುರಿತದ್ದು
14ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.15ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, <<ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ>> ಎಂದು ಮಹಾಧ್ವನಿಯಿಂದ ಕೂಗಿದನು.16ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.17ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು.18ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, <<ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೆಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ>> ಎಂದು ಮಹಾಧ್ವನಿಯಿಂದ ಕೂಗಿದನು.19ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು.20ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.
15ಅಂತಿಮ ಉಪದ್ರವಗಳು
1ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.2ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು.3ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, <<ಕರ್ತನಾದ ದೇವರೇ ಸರ್ವಶಕ್ತನೇ,
ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ.
ಸರ್ವಜನಾಂಗಗಳ ಅರಸನೇ.
ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ ಎಂದು ತಿಳಿಯಪಡಿಸಿವೆ.
4ಕರ್ತನೇ, ನಿನಗೆ ಭಯಪಡದವರುಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ?
ನೀನೊಬ್ಬನೇ ಪರಿಶುದ್ಧನು.
ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ
ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು
ನಿನ್ನನ್ನು ಆರಾಧಿಸುವರು.>>
5ಇದಾದ ನಂತರ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು.6ಆ ಆಲಯದೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.7 ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು.8 ದೇವರ ಮಹಿಮೆಯಿಂದಲೂ,ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.
16ದೇವರ ಕೋಪದ ಬಟ್ಟಲುಗಳು
1ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, <<ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ>> ಎಂದು ಹೇಳಿತು.2ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.3ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು.4ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು.5ಆ ಮೇಲೆ ಜಲಾಧಿಪತಿಯಾದ ದೂತನು, <<ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.6ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.>> ಎಂದು ಹೇಳುವುದನ್ನು ಕೇಳಿದೆನು.7ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, <<ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ>> ಎಂದು ಹೇಳುವುದನ್ನು ಕೇಳಿದೆನು.8ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು.9ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.10ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,11ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.12ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.13ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.14ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.15<<ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.>>16ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.17ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ <<ಸಂಭವಿಸಿ ಆಯಿತು>> ಎಂದು ಹೇಳಿತು.18ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.19 ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.20ಆಗ ಪ್ರತಿಯೊಂದು ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು.21ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.
17ಬಾಬೆಲೆಂಬ ಜಾರಸ್ತ್ರೀಯ ನಾಶವು
1 ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನಗೆ ಹೇಳಿದನು, <<ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.2 ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು>> ಎಂದು ಹೇಳಿದನು.3ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.4ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.5ಅವಳ ಹಣೆಯ ಮೇಲೆ, <<ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ>> ಎಂಬ ಹೆಸರನ್ನು ಬರೆಯಲಾಗಿತ್ತು.6ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು.ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.
7ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ <<ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ.8ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.9ಇದನ್ನು ಗ್ರಹಿಸಿಕೊಳ್ಳಲು ಜ್ಞಾನವೂ, ವಿವೇಕವೂ ಬೇಕು. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ.10 ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ.11ಇದಲ್ಲದೆ ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು.12 ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು.13ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುವರು.14 ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರಾದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.>>15ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, <<ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.16ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.17ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.18ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುವ ಅಧಿಕಾರ ಹೊಂದಿದ ಮಹಾನಗರಿಯೇ ಆಗಿದೆ.>>
18ಬಾಬೆಲಿನ ಪತನವು
1ಇದಾದ ನಂತರ ವಿಶೇಷ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು.2ಅವನು ಬಲವಾದ ಧ್ವನಿಯಿಂದ ಕೂಗುತ್ತಾ <<ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಪಂಜರವಾಗಿದ್ದಳು.3ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು>> ಎಂದು ಹೇಳಿದನು.4ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು,<<ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ,
ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು.
ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.
5 ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ.
6 ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ.ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ.
ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.
7 ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ,
ಏಕೆಂದರೆ ಅವಳು ತನ್ನ ಹೃದಯದಲ್ಲಿ,
<ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ,
ನಾನು ವಿಧವೆಯಲ್ಲ,
ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ> ಎಂದು ಹೇಳಿಕೊಂಡಿದ್ದಾಳೆ.
8ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು.
ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ
ಅವಳು ಬೆಂಕಿಯಿಂದ ನಾಶವಾಗುವಳು.
9-10 ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, <ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ> ಎಂದು ಶೋಕಿಸುವರು.11ಇದಲ್ಲದೆ ಭೂಮಿಯ ವರ್ತಕರು ಅವಳಿಗಾಗಿ ದುಃಖಿಸಿ ಗೋಳಾಡುತ್ತಾ,12ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಷ್ಮೆ, ಕಡುಗೆಂಪು ಉಡುಪು ಸಕಲ ವಿಧವಾದ ಮರಮುಟ್ಟು ಮತ್ತು ದಂತದ ಸಾಮಾನುಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ. ಸುಗಂಧ ಸರಕುಗಳಾದ13ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು.14<ನೀನು ಬಯಸಿದ ನಿನ್ನ ಫಲಗಳು ನಿನ್ನನ್ನು ಬಿಟ್ಟು ಹೋದವು. ನಿನ್ನ ಎಲ್ಲಾ ವೈಭವವು ಹಾಗೂ ಶೋಭಾಯಮಾನವಾದ ಸೊಗಸುಗಳೆಲ್ಲ ನಿನ್ನಿಂದ ನಾಶವಾದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವುದೇ ಇಲ್ಲ.>15 ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ದೂರದಲ್ಲಿ ನಿಂತು ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದುಃಖಿಸಿ ಗೋಳಾಡುತ್ತಾ,16<ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.>17ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು,18 ಅವಳ ದಹನದ ಹೊಗೆಯನ್ನು ನೋಡಿ <ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವುದು?> ಎಂದು ಮೊರೆಯಿಡುವರು.19ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, <ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ> >> ಎಂದು ಗೋಳಾಡುತ್ತಾ ದುಃಖಿಸುವರು.20 ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.21ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, <<ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.22ಬಾಬೆಲೇ ನಿನ್ನಲ್ಲಿ ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು.23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು.24 ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ಅವಳಲ್ಲಿಯೇ ಸಿಕ್ಕಿತಲ್ಲಾ>> ಎಂದು ಹೇಳಿದನು.
191ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, << ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.2 ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.>> ಎಂದು ಹೇಳಿ,3ಎರಡನೆಯ ಸಾರಿ, <<ಹಲ್ಲೆಲೂಯಾ ಎಂದು ಆರ್ಭಟಿಸಿ, ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ>> ಎಂದು ಹೇಳಿದರು.4ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕುಳಿತಿರುವ ದೇವರಿಗೆ ಆರಾಧನೆ ಮಾಡಿ, <<ಆಮೆನ್, ಹಲ್ಲೆಲೂಯಾ>> ಎಂದರು.ಕುರಿಮರಿಯ ವಿವಾಹದ ಔತಣ
5ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, <<ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ>> ಎಂದು ಹೇಳಿತು.6ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, <<ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.7 ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ದಮಾಡಿಕೊಂಡಿದ್ದಾಳೆ>> ಎಂದು ಹೇಳಿತು.8 ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ).9ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, <<ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ>> ಎಂದು ನನಗೆ ಹೇಳಿ, <<ಈ ಮಾತುಗಳು ದೇವರ ಸತ್ಯವಚನಗಳಾಗಿವೆ>> ಅಂದನು.10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, <<ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ>> ಎಂದು ಹೇಳಿದನು.11 ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.12 ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.13ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು.14ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.15 ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.16ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ << ರಾಜಾಧಿರಾಜನೂ ಕರ್ತಾಧಿ ಕರ್ತನೂ>> ಎಂಬ ಹೆಸರು ಬರೆದಿದೆ.17ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, <<ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ,18ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ>> ಎಂದು ಹೇಳಿದನು.19ತರುವಾಯ ಆ ಮೃಗವೂ, ಭೂರಾಜರೂ, ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿಬಂದಿರುವುದನ್ನು ಕಂಡೆನು.20ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.21ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.
20ಸಾವಿರ ವರ್ಷಗಳು
1ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.2ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.3ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.5ಸತ್ತವರಲ್ಲಿ ಉಳಿದವರು ಆ ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೇಯ ಪುನರುತ್ಥಾನವು.6 ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.7ಆ ಸಾವಿರ ವರ್ಷಗಳು ಮುಗಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು.8ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.9ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು.10ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.ಕಡೇ ನ್ಯಾಯತೀರ್ಪನ್ನು ಕುರಿತದ್ದು
11ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.12ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.13ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.14ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.15ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
21ನೂತನ ಭೂಮ್ಯಾಕಾಶಗಳು
1ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.3ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, <<ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.4 ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು>> ಎಂದು ಹೇಳಿತು.5ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, <<ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ>> ಎಂದನು. ಮತ್ತು ಒಬ್ಬನು ನನಗೆ, <<ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ>> ಎಂದು ಹೇಳಿದನು.6ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, <<ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.7 ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.8 ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು>> ಎಂದು ನನಗೆ ಹೇಳಿದನು.ಹೊಸ ಯೆರೂಸಲೇಮ್
9 ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, <<ಬಾ ಕುರಿಮರಿಯಾದಾತನಿಗೆ ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು>> ಎಂದು ಹೇಳಿ,10 ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು.11ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.12ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು.13ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.14 ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.15ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.16ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2200 ಕಿಲೊಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು.17ಅವನು ಅದರ ಗೋಡೆಯನ್ನು ಅಳತೆ ಮಾಡಿದನು. ಅದು ನೂರನಾಲ್ವತ್ತು ನಾಲ್ಕು ಮೊಳವಾಗಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಎಂದರೆ ದೇವದೂತನ ಮೊಳ.18ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.19ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೇಯದು ಪದ್ಮರಾಗ,20ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲಸ್ಫಟಿಕ,21ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಶುದ್ಧವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.22 ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.23 ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.24 ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು. ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು.25 ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ ರಾತ್ರಿಯಂತೂ ಇಲ್ಲವೇ ಇಲ್ಲ.26ಜನಾಂಗಗಳ ವೈಭವವೂ ಗೌರವವೂ ಅಲ್ಲಿಗೆ ತರಲ್ಪಡುವವು.27 ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.
221ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,2ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.3 ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು.4 ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು.5ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.ಯೇಸುವಿನ ಪುನರಾಗಮನ
6ಆ ಮೇಲೆ ದೇವದೂತನು ನನಗೆ, <<ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.7<<ಇಗೋ ನೋಡು! ನಾನು ಅತಿಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು>> ಎಂದು ಹೇಳಿದನು.8 ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.9ಆದರೆ ಅವನು ನನಗೆ, <<ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು>> ಎಂದು ಹೇಳಿದನು.10ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ <<ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ.11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.>>12<<ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.13ನಾನೇ ಆದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.14 ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.15ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು>> ಎಂದು ಹೇಳಿದನು.16<<ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.>>17ಆತ್ಮನು ಮತ್ತು ಮದಲಗಿತ್ತಿಯು, <<ಬಾ>> ಎನ್ನುತ್ತಾರೆ. ಕೇಳುವವನು, <<ಬಾ>> ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.ಸಮಾಪ್ತಿ
18ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.19ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.20ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, <<ಹೌದು ನಾನು ನಿಜವಾಗಿ ಬೇಗನೇ ಬರುತ್ತೇನೆ!>> ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.21ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!